Attempt to kidnap young woman in Bangalore, Act by relativesKidnapping Attempt: ಬೆಂಗಳೂರಿನಲ್ಲಿ ಯುವತಿಯ ಕಿಡ್ನ್ಯಾಪ್‌ಗೆ ಯತ್ನ; ಸಂಬಂಧಿಕನಿಂದಲೇ ಕೃತ್ಯ - Vistara News

ಕರ್ನಾಟಕ

Kidnapping Attempt: ಬೆಂಗಳೂರಿನಲ್ಲಿ ಯುವತಿಯ ಕಿಡ್ನ್ಯಾಪ್‌ಗೆ ಯತ್ನ; ಸಂಬಂಧಿಕನಿಂದಲೇ ಕೃತ್ಯ

Kidnapping Attempt: ವಿಧಾನಸೌಧ ಮೆಟ್ರೋ ನಿಲ್ದಾಣದ ಬಳಿ ಯುವತಿಯನ್ನು ಕಿಡ್ನ್ಯಾಪ್‌ ಮಾಡಲು ಇಬ್ಬರು ಯತ್ನಿಸಿದ್ದಾರೆ. ಆದರೆ, ರಾಜ್ಯ ಕೈಗಾರಿಕಾ ಭದ್ರತಾ ಪಡೆ ಸಿಬ್ಬಂದಿ, ಯುವತಿಯನ್ನು ರಕ್ಷಿಸಿದ್ದಾರೆ.

VISTARANEWS.COM


on

Attempt to kidnap at Bangalore
ಮಹತ್ವದ, ಕುತೂಹಲಕರ ಸುದ್ದಿಗಾಗಿ ಫಾಲೊ ಮಾಡಿ

ಬೆಂಗಳೂರು: ನಗರದಲ್ಲಿ ಯುವತಿಯ ಕಿಡ್ನ್ಯಾಪ್‌ಗೆ ಕಿಡಿಗೇಡಿಗಳು ಯತ್ನಿಸಿರುವ ಘಟನೆ (Kidnapping Attempt) ಬುಧವಾರ ನಡೆದಿದ್ದು, ರಾಜ್ಯ ಕೈಗಾರಿಕಾ ಭದ್ರತಾ ಪಡೆ (ಕೆಎಸ್‌ಐಎಸ್‌ಎಫ್) ಸಿಬ್ಬಂದಿ ಸಮಯ ಪ್ರಜ್ಞೆಯಿಂದ ಯುವತಿಯನ್ನು ರಕ್ಷಣೆ ಮಾಡಿ, ಆರೋಪಿಗಳನ್ನು ಹಿಡಿದು ಪೊಲೀಸರಿಗೆ ಒಪ್ಪಿಸಿದ್ದಾರೆ.

ವಿಧಾನಸೌಧ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಬುಧವಾರ ಸಂಜೆ ಘಟನೆ ನಡೆದಿದೆ. ಸಮಾಜ ಕಲ್ಯಾಣ ಇಲಾಖೆಯಲ್ಲಿ ಕೆಲಸ ಮಾಡುತ್ತಿದ್ದ ಯುವತಿಯ ಕಿಡ್ನ್ಯಾಪ್‌ ಯತ್ನ ನಡೆದಿದೆ. ಸಂಜೆ ಕೆಲಸ ಮುಗಿಸಿಕೊಂಡು ಮನೆಗೆ ಹೋಗುತ್ತಿದ್ದ ಯುವತಿಯನ್ನು ವಿಧಾನಸೌಧ ಮೆಟ್ರೋ ನಿಲ್ದಾಣದ ಬಳಿ ಇಬ್ಬರು ಯುವಕರು ಕಿಡ್ನ್ಯಾಪ್‌ ಮಾಡಲು ಯತ್ನಿಸಿದ್ದಾರೆ. ಏಕಾಏಕಿ ಎಳೆದು ಕಾರಿನಲ್ಲಿ ಕೂರಿಸಿದಾಗ ಯುವತಿ ರಕ್ಷಿಸುವಂತೆ ಕೂಗಿಕೊಂಡಿದ್ದಾಳೆ. ಈ ವೇಳೆ ಅಲ್ಲೇ ಇದ್ದ ಕೆಎಸ್‌ಐಎಸ್‌ಎಫ್ ತಂಡ ಧಾವಿಸಿ, ಯುವತಿಯನ್ನು ರಕ್ಷಿಸಿದೆ. ನಂತರ ಇಬ್ಬರು ಆರೋಪಿಗಳನ್ನು ವಿಧಾನಸೌಧ ಪೊಲೀಸರಿಗೆ ಒಪ್ಪಿಸಲಾಗಿದೆ.

ಇದನ್ನೂ ಓದಿ | Lokayukta Raid: 20 ಸಾವಿರ ರೂಪಾಯಿ ಲಂಚಕ್ಕೆ ಬೇಡಿಕೆ; ಪಿಎಸ್‌ಐ ಸೇರಿ ಮೂವರು ಲೋಕಾಯುಕ್ತ ಬಲೆಗೆ

ಕೆಎಸ್ಐಎಸ್‌ಎಫ್ ಪಿಎಸ್‌ಐ ನಾರಾಯಣ್, ಪ್ರಶಾಂತ್ ನಾಗರಾಜ್ ಹಾಗೂ ಇತರ ಸಿಬ್ಬಂದಿಯಿಂದ ಯುವತಿಯ ರಕ್ಷಣೆ ಮಾಡಲಾಗಿದೆ. ಇಬ್ಬರು ಆರೋಪಿಗಳನ್ನು ಪೊಲೀಸರು ವಶಕ್ಕೆ ಪಡೆದು ವಿಚಾರಣೆ ನಡೆಸುತ್ತಿದ್ದಾರೆ.

The accused tried to kidnap the young woman in bangalore
ಯುವತಿಯ ಕಿಡ್ನ್ಯಾಪ್‌ಗೆ ಯತ್ನಿಸಿದ ಆರೋಪಿಗಳು

ಸಂಬಂಧಿಕನಿಂದಲೇ ಕಿಡ್ನ್ಯಾಪ್‌ಗೆ ಯತ್ನ

ಕಳೆದ ಕೆಲ ತಿಂಗಳ ಹಿಂದೆ ಯುವತಿಯ ತಂದೆ ತೀರಿಕೊಂಡಿದ್ದರು. ತಂದೆಯ ಎಫ್‌ಡಿಎ ಕೆಲಸ ಮಗಳಿಗೆ ಬಂದಿತ್ತು. ಈ ವಿಚಾರಕ್ಕೆ ಯುವತಿಯ ಮೇಲೆ ಸಂಬಂಧಿ (ಯುವತಿ ತಂದೆಯ 2ನೇ ಪತ್ನಿಯ ಸಹೋದರ) ಕಣ್ಣಿಟ್ಟಿದ್ದ ಎನ್ನಲಾಗಿದೆ. ಈ ಹಿಂದೆ ಎಫ್‌ಡಿಎ ಕೆಲಸ ತನ್ನ ಅಕ್ಕನಿಗೆ ಬರಬೇಕಿತ್ತು ಎಂದು ಆರೋಪಿ ಕ್ಯಾತೆ ತೆಗೆದಿದ್ದ. ಅಲ್ಲದೇ ಯುವತಿಯನ್ನು ಮದುವೆಯಾಗಲು ಪ್ಲಾನ್ ಮಾಡಿದ್ದ. ಆದರೆ, ಯುವತಿಗೆ ಆರೋಪಿ ಇಷ್ಟ ಇರಲಿಲ್ಲ. ಹೀಗಾಗಿ ಬಲವಂತವಾಗಿ ಯುವತಿಯನ್ನು ಕಿಡ್ನ್ಯಾಪ್‌ ಮಾಡಲು ಮುಂದಾಗಿದ್ದ. ಆದರೆ, ಅದೃಷ್ಟವಶಾತ್‌ ಯುವತಿಯನ್ನು ರಾಜ್ಯ ಕೈಗಾರಿಕಾ ಭದ್ರತಾ ಪಡೆಯ ಸಿಬ್ಬಂದಿ ರಕ್ಷಣೆ ಮಾಡಿದ್ದಾರೆ.

ಕ್ಷಣ ಕ್ಷಣದ ಮಾಹಿತಿಗಾಗಿ Vistara News FaceBook ಪೇಜ್ ಫಾಲೋ ಮಾಡಿ
Continue Reading
Click to comment

Leave a Reply

Your email address will not be published. Required fields are marked *

Latest

ಜೈಲಿನಲ್ಲಿದ್ದುಕೊಂಡೆ ವಿಧ್ವಂಸ ಕೃತ್ಯಕ್ಕೆ ಸಂಚು: 7 ಆರೋಪಿಗಳಿಗೆ ಕಠಿಣ ಶಿಕ್ಷೆ ಪ್ರಕಟಿಸಿದ ಎನ್‌ ಐ ಎ ಕೋರ್ಟ್

VISTARANEWS.COM


on

ಬೆಂಗಳೂರು: ನಗರದ ಜೈಲಿನಲ್ಲಿದ್ದುಕೊಂಡೇ ದೇಶದ ವಿವಿಧೆಡೆ ವಿಧ್ವಂಸಕ ಕೃತ್ಯಗಳ ಎಸೆಗಲು ಸಂಚು ರೂಪಿಸಿದ್ದ ಲಷ್ಕರ್‌ ಎ ತೊಬ್ಯಾ ಸಂಪರ್ಕಿತ ಏಳು ಆರೋಪಿಗಳಿಗೆ ಎನ್‌ ಐ ಎ ನ್ಯಾಯಾಲಯ 7 ವರ್ಷಗಳ ಕಠಿಣ ಕಾರಾಗೃಹ ಶಿಕ್ಷೆ ಪ್ರಕಟಿಸಿದೆ.
ಅಪರಾಧಿಗಳಾದ ಲಷ್ಕರ್‌ – ಎ-ತೊಯ್ಬಾ ಸಂಪರ್ಕಿತ ಉಗ್ರ ಟಿ.ನಾಸಿರ್‌ ನೇತೃತ್ವದಲ್ಲಿ ಸಯ್ಯದ್ ಸುಹೈಲ್ ಖಾನ್, ಮೊಹಮ್ಮದ್ ಉಮರ್, ಜಾಹಿದ್ ತಬ್ರೇಜ್, ಸಯ್ಯದ್ ಮುದಸ್ಸಿರ್ ಪಾಶಾ, ಮೊಹಮ್ಮದ್ ಫೈಸಲ್ ರಬ್ಬಾನಿ ಮತ್ತು ಸಲ್ಮಾನ್ ಖಾನ್ ಶಿಕ್ಷೆಗೆ ಗುರಿಯಾದವರು. ಪ್ರಕರಣದಲ್ಲಿ ಆರೋಪಿಗಳು ತಪ್ಪೊಪ್ಪಿಕೊಂಡಿದ್ದರು.
ಇವರು ಬೆಂಗಳೂರಿನ ಪರಪ್ಪನ ಅಗ್ರಹಾರದ ಜೈಲಿನಲ್ಲಿದ್ದುಕೊಂಡೇ ಯುವಕರನ್ನು ಉಗ್ರವಾದದತ್ತ ಆಕರ್ಷಿಸಿ, ಮತಾಂತರಗೊಳಿಸಿ ದೇಶದಲ್ಲಿ ದಾಳಿ ನಡೆಸಲು ಸಂಚು ರೂಪಿಸಿದ್ದರು. ಆರೋಪ ರುಜುವಾತಾದ ಹಿನ್ನೆಲೆಯಲ್ಲಿ ಕೋರ್ಟ್‌ ಏಳು ವರ್ಷ ಜೈಲು ಶಿಕ್ಷೆ ಸೇರಿದಂತೆ 48 ಸಾವಿರ ರೂಪಾಯಿ ದಂಡ ವಿಧಿಸಿದೆ.
2023ರ ಜುಲೈನಲ್ಲಿ ಶಸ್ತ್ರಾಸ್ತ್ರಗಳು, ಗುಂಡುಗಳು ಮತ್ತು ಡಿಜಿಟಲ್ ಸಾಧನಗಳನ್ನು ವಶಪಡಿಸಿಕೊಂಡ ನಂತರ ಬೆಂಗಳೂರು ಸೆಂಟ್ರಲ್ ಕ್ರೈಮ್ ಬ್ರಾಂಚ್ (CCB) ಈ ಬಗ್ಗೆ ಪ್ರಕರಣ ದಾಖಲಿಸಿತ್ತು. ಇವರು ಬೆಂಗಳೂರಿನಲ್ಲಿಯೂ ಉಗ್ರ ದಾಳಿಗಳನ್ನು ನಡೆಸುವ ಯೋಜನೆ ರೂಪಿಸಿದ್ದರು ಎಂಬುದು ಬಯಲಾಗಿತ್ತು. ನಂತರ ಈ ಪ್ರಕರಣದ ತನಿಖೆಯನ್ನು ಎನ್‌ಐಎ ಕೈಗೆತ್ತಿಕೊಂಡಿತ್ತು.
2008ರ ಬೆಂಗಳೂರು ಸರಣಿ ಸ್ಫೋಟ ಪ್ರಕರಣದಲ್ಲಿ ಟಿ. ನಾಸೀರ್ ಅದಾಗಲೇ ಜೀವಾವಧಿ ಶಿಕ್ಷೆಯನ್ನು ಅನುಭವಿಸುತ್ತಿದ್ದ ಎಂಬುದು ಗಮನಾರ್ಹ. ಬಂಧಿತರಲ್ಲಿ ಸಲ್ಮಾನ್ ಖಾನ್ ಎಂಬಾತನನ್ನು ರುವಾಂಡಾ ಗಣರಾಜ್ಯದಿಂದ ಹಸ್ತಾಂತರದ ಮೂಲಕ ಭಾರತಕ್ಕೆ ತರಲಾಗಿತ್ತು.
ಈ ಪ್ರಕರಣದಲ್ಲಿ 11 ಮಂದಿ ಬಂಧಿತ ಆರೋಪಿಗಳು ಹಾಗೂ ಪರಾರಿಯಾಗಿರುವ ಜುನೈದ್ ಅಹ್ಮದ್ ವಿರುದ್ಧ ಎನ್‌ಐಎ ಆರೋಪಪಟ್ಟಿ ಸಲ್ಲಿಸಿತ್ತು.

Continue Reading

Latest

ಸಚಿವ ಪ್ರಲ್ಹಾದ ಜೋಶಿ ಮನವಿಗೆ ಸ್ಪಂದನೆ; “ಧಾರವಾಡ ಆಕಾಶವಾಣಿ ಕೇಂದ್ರ” ಸ್ಥಳಾಂತರಿಸದಿರಲು ನಿರ್ಧಾರ

VISTARANEWS.COM


on

ನವದೆಹಲಿ: ಧಾರವಾಡ ಆಕಾಶವಾಣಿ ಪ್ರಾದೇಶಿಕ ಕೇಂದ್ರ ಸ್ಥಳಾಂತರ ನಿರ್ಧಾರವನ್ನು ಪ್ರಸಾರ ಭಾರತಿ ಹಿಂತೆಗೆದುಕೊಂಡಿದ್ದು, ಉತ್ತರ ಕರ್ನಾಟಕ ಜನರ ಒತ್ತಾಸೆ, ಅಭಿಲಾಷೆಯಂತೆ ಧಾರವಾಡದಲ್ಲಿಯೇ ಮುಂದುವರಿಸಲು ನಿರ್ಧರಿಸಿದೆ.
ಧಾರವಾಡ ಸಂಸದರೂ ಆಗಿರುವ ಕೇಂದ್ರ ಆಹಾರ ಮತ್ತು ನಾಗರಿಕ ಸರಬರಾಜು ಸಚಿವ ಪ್ರಲ್ಹಾದ ಜೋಶಿ ಅವರ ಮನವಿ ಮೇರೆಗೆ ಪ್ರಸಾರ ಭಾರತಿ ಈ ಕ್ರಮಕ್ಕೆ ಮುಂದಾಗಿದೆ. ಉತ್ತರ ಕರ್ನಾಟಕ ಭಾಗದಲ್ಲಿ ಮನೆಮಾತಾಗಿರುವ ಜನಪ್ರಿಯ ಆಕಾಶವಾಣಿ ಪ್ರಾದೇಶಿಕ ಕೇಂದ್ರವನ್ನು ಧಾರವಾಡದಲ್ಲಿಯೇ ಮುಂದುವರಿಸುವಂತೆ ಸಚಿವರು ಕೇಂದ್ರದ ಗಮನ ಸೆಳೆದಿದ್ದರು.
ಧಾರವಾಡ ಆಕಾಶವಾಣಿ ಪ್ರಾದೇಶಿಕ ಕೇಂದ್ರವನ್ನು ಬೆಂಗಳೂರಿಗೆ ಸ್ಥಳಾಂತರಿಸಲು ಪ್ರಸಾರ ಭಾರತಿ ಸಕ್ಷಮ ಪ್ರಾಧಿಕಾರ ನಿರ್ಣಯಿಸಿತ್ತು. ಈ ಸಂಬಂಧ ಉತ್ತರ ಕರ್ನಾಟಕದ ಜನರಿಂದ ತೀವ್ರ ವಿರೋಧ ವ್ಯಕ್ತವಾಗಿತ್ತಲ್ಲದೆ, ಸಚಿವ ಪ್ರಲ್ಹಾದ ಜೋಶಿ ಅವರಿಗೆ ಮನವಿ ಸಹ ಮಾಡಿದ್ದರು.
ಈ ಹಿನ್ನೆಲೆಯಲ್ಲಿ ಪ್ರಲ್ಹಾದ ಜೋಶಿ ಅವರು ಕೇಂದ್ರ ಮಾಹಿತಿ ಮತ್ತು ಪ್ರಸಾರ ಸಚಿವ ಅಶ್ವಿನಿ ವೈಷ್ಣವ್ ಅವರನ್ನು ಸಂಪರ್ಕಿಸಿ ಆಕಾಶವಾಣಿ ಕೇಂದ್ರವನ್ನು ಧಾರವಾಡದಲ್ಲೇ ಮುಂದುವರಿಸುವಂತೆ ಕೋರಿದ್ದರು. ಧಾರವಾಡ ಪ್ರಸಾರ ಭಾರತೀಯ ಕೇಂದ್ರದ ಕಾರ್ಯವ್ಯಾಪ್ತಿ ಮತ್ತು ಅದನ್ನು ಧಾರವಾಡದಲ್ಲಿಯೇ ಮುಂದುವರಿಸುವ ಅವಶ್ಯಕತೆ ಬಗ್ಗೆ ಮನವರಿಕೆ ಮಾಡಿಕೊಟ್ಟಿದ್ದರು.
ಜೋಶಿ ಮನವಿಗೆ ಅಶ್ವಿನಿ ವೈಷ್ಣವ್ ಸ್ಪಂದನೆ: ಸಚಿವ ಪ್ರಲ್ಹಾದ ಜೋಶಿ ಅವರ ಮನವಿಗೆ ಸಚಿವ ಅಶ್ವಿನಿ ವೈಷ್ಣವ್ ಸ್ಪಂದಿಸಿದ್ದು, ಧಾರವಾಡ ಆಕಾಶವಾಣಿ ಪ್ರಾದೇಶಿಕ ಕೇಂದ್ರವನ್ನು ಧಾರವಾಡದಲ್ಲಿಯೇ ಮುಂದುವರಿಸುವಂತೆ ಪ್ರಸಾರ ಭಾರತಿಗೆ ಆದೇಶಿಸಿದ್ದಾರೆ. ಪ್ರಯುಕ್ತ ಸಚಿವ ಜೋಶಿ ಅವರು ಪ್ರಧಾನಿ ನರೇಂದ್ರ ಮೋದಿ ಮತ್ತು ಅಶ್ವಿನಿ ವೈಷ್ಣವ ಅವರಿಗೆ ಉತ್ತರ ಕರ್ನಾಟಕ ಜನರ ಪರವಾಗಿ ಧನ್ಯವಾದ ಅರ್ಪಿಸಿದ್ದಾರೆ.

ಧಾರವಾಡ ಆಕಾಶವಾಣಿ ಪ್ರಾದೇಶಿಕ ಕೇಂದ್ರ ಸ್ಥಳಾಂತರ ನಿರ್ಧಾರವನ್ನು ಪ್ರಸಾರ ಭಾರತಿ ಹಿಂತೆಗೆದುಕೊಂಡಿದ್ದು, ಉತ್ತರ ಕರ್ನಾಟಕ ಜನರ ಒತ್ತಾಸೆ, ಅಭಿಲಾಷೆಯಂತೆ ಧಾರವಾಡದಲ್ಲಿಯೇ ಮುಂದುವರಿಸಲು ನಿರ್ಧರಿಸಿದೆ.
ಧಾರವಾಡ ಸಂಸದರೂ ಆಗಿರುವ ಕೇಂದ್ರ ಆಹಾರ ಮತ್ತು ನಾಗರಿಕ ಸರಬರಾಜು ಸಚಿವ ಪ್ರಲ್ಹಾದ ಜೋಶಿ ಅವರ ಮನವಿ ಮೇರೆಗೆ ಪ್ರಸಾರ ಭಾರತಿ ಈ ಕ್ರಮಕ್ಕೆ ಮುಂದಾಗಿದೆ. ಉತ್ತರ ಕರ್ನಾಟಕ ಭಾಗದಲ್ಲಿ ಮನೆಮಾತಾಗಿರುವ ಜನಪ್ರಿಯ ಆಕಾಶವಾಣಿ ಪ್ರಾದೇಶಿಕ ಕೇಂದ್ರವನ್ನು ಧಾರವಾಡದಲ್ಲಿಯೇ ಮುಂದುವರಿಸುವಂತೆ ಸಚಿವರು ಕೇಂದ್ರದ ಗಮನ ಸೆಳೆದಿದ್ದರು.
ಧಾರವಾಡ ಆಕಾಶವಾಣಿ ಪ್ರಾದೇಶಿಕ ಕೇಂದ್ರವನ್ನು ಬೆಂಗಳೂರಿಗೆ ಸ್ಥಳಾಂತರಿಸಲು ಪ್ರಸಾರ ಭಾರತಿ ಸಕ್ಷಮ ಪ್ರಾಧಿಕಾರ ನಿರ್ಣಯಿಸಿತ್ತು. ಈ ಸಂಬಂಧ ಉತ್ತರ ಕರ್ನಾಟಕದ ಜನರಿಂದ ತೀವ್ರ ವಿರೋಧ ವ್ಯಕ್ತವಾಗಿತ್ತಲ್ಲದೆ, ಸಚಿವ ಪ್ರಲ್ಹಾದ ಜೋಶಿ ಅವರಿಗೆ ಮನವಿ ಸಹ ಮಾಡಿದ್ದರು.
ಈ ಹಿನ್ನೆಲೆಯಲ್ಲಿ ಪ್ರಲ್ಹಾದ ಜೋಶಿ ಅವರು ಕೇಂದ್ರ ಮಾಹಿತಿ ಮತ್ತು ಪ್ರಸಾರ ಸಚಿವ ಅಶ್ವಿನಿ ವೈಷ್ಣವ್ ಅವರನ್ನು ಸಂಪರ್ಕಿಸಿ ಆಕಾಶವಾಣಿ ಕೇಂದ್ರವನ್ನು ಧಾರವಾಡದಲ್ಲೇ ಮುಂದುವರಿಸುವಂತೆ ಕೋರಿದ್ದರು. ಧಾರವಾಡ ಪ್ರಸಾರ ಭಾರತೀಯ ಕೇಂದ್ರದ ಕಾರ್ಯವ್ಯಾಪ್ತಿ ಮತ್ತು ಅದನ್ನು ಧಾರವಾಡದಲ್ಲಿಯೇ ಮುಂದುವರಿಸುವ ಅವಶ್ಯಕತೆ ಬಗ್ಗೆ ಮನವರಿಕೆ ಮಾಡಿಕೊಟ್ಟಿದ್ದರು.
ಜೋಶಿ ಮನವಿಗೆ ಅಶ್ವಿನಿ ವೈಷ್ಣವ್ ಸ್ಪಂದನೆ: ಸಚಿವ ಪ್ರಲ್ಹಾದ ಜೋಶಿ ಅವರ ಮನವಿಗೆ ಸಚಿವ ಅಶ್ವಿನಿ ವೈಷ್ಣವ್ ಸ್ಪಂದಿಸಿದ್ದು, ಧಾರವಾಡ ಆಕಾಶವಾಣಿ ಪ್ರಾದೇಶಿಕ ಕೇಂದ್ರವನ್ನು ಧಾರವಾಡದಲ್ಲಿಯೇ ಮುಂದುವರಿಸುವಂತೆ ಪ್ರಸಾರ ಭಾರತಿಗೆ ಆದೇಶಿಸಿದ್ದಾರೆ. ಪ್ರಯುಕ್ತ ಸಚಿವ ಜೋಶಿ ಅವರು ಪ್ರಧಾನಿ ನರೇಂದ್ರ ಮೋದಿ ಮತ್ತು ಅಶ್ವಿನಿ ವೈಷ್ಣವ ಅವರಿಗೆ ಉತ್ತರ ಕರ್ನಾಟಕ ಜನರ ಪರವಾಗಿ ಧನ್ಯವಾದ ಅರ್ಪಿಸಿದ್ದಾರೆ.

Continue Reading

Latest

ಗೋಲ್ಡ್ ಸ್ಮಗ್ಲಿಂಗ್ ಹಗರಣ: ನಟಿ ರನ್ಯಾ ರಾವ್​​ಗೆ ಜಾಮೀನು ಮಂಜೂರು ಮಾಡಿದ ನ್ಯಾಯಾಲಯ!

VISTARANEWS.COM


on

ಬೆಂಗಳೂರು: ಸ್ಯಾಂಡಲ್‌ವುಡ್ ನಟಿ ರನ್ಯಾ ರಾವ್ ಅವರಿಗೆ ಕೋಟ್ಯಂತರ ರೂಪಾಯಿ ಮೌಲ್ಯದ ಚಿನ್ನದ ಕಳ್ಳಸಾಗಣೆ ಪ್ರಕರಣದಲ್ಲಿ ಕೊನೆಗೂ ಬಿಗ್ ರಿಲೀಫ್ ಸಿಕ್ಕಿದೆ. ಕಳೆದ ಒಂದು ವರ್ಷದಿಂದ ಜೈಲು ವಾಸ ಅನುಭವಿಸುತ್ತಿದ್ದ ನಟಿಗೆ ಆರ್ಥಿಕ ಅಪರಾಧಗಳ ತಡೆ ನ್ಯಾಯಾಲಯವು ಬುಧವಾರ ಜಾಮೀನು ಮಂಜೂರು ಮಾಡಿ ಆದೇಶ ಹೊರಡಿಸಿದೆ. ಈ ಹಿನ್ನೆಲೆಯಲ್ಲಿ ಇಂದು ಅವರು ಬೆಂಗಳೂರಿನ ಪರಪ್ಪನ ಅಗ್ರಹಾರ ಜೈಲಿನಿಂದ ಬಿಡುಗಡೆಯಾಗಲಿದ್ದು, ದೀರ್ಘಕಾಲದ ಕಾನೂನು ಹೋರಾಟದ ನಂತರ ಅವರಿಗೆ ತಾತ್ಕಾಲಿಕ ಜಯ ಸಿಕ್ಕಂತಾಗಿದೆ.

ಸುಮಾರು 102 ಕೋಟಿ ರೂಪಾಯಿಗೂ ಅಧಿಕ ಮೌಲ್ಯದ ಚಿನ್ನವನ್ನು ಅಕ್ರಮವಾಗಿ ಸಾಗಾಟ ಮಾಡಿದ ಗಂಭೀರ ಆರೋಪದ ಮೇಲೆ 2025ರ ಮಾರ್ಚ್ 3ರಂದು ಡಿಆರ್​​ಐ (DRI) ಅಧಿಕಾರಿಗಳು ರನ್ಯಾ ರಾವ್ ಅವರನ್ನು ಬಂಧಿಸಿದ್ದರು. ಈ ಹಿಂದೆ ಹೈಕೋರ್ಟ್ ಏಕಸದಸ್ಯ ಪೀಠವು ಇವರ ಜಾಮೀನು ಅರ್ಜಿಯನ್ನು ವಜಾಗೊಳಿಸಿತ್ತು. ಅಲ್ಲದೆ, ಕೇಂದ್ರೀಯ ಆರ್ಥಿಕ ಗುಪ್ತಚರ ಬ್ಯೂರೋ ಕಾಫಿಪೋಸಾ (COFEPOSA) ಕಾಯ್ದೆಯ ಸೆಕ್ಷನ್ 3(1) ಅಡಿ ಬಂಧನದ ಆದೇಶ ಹೊರಡಿಸಿದ್ದರಿಂದ, ನಟಿಗೆ ಕಳೆದ ಒಂದು ವರ್ಷದಿಂದ ಜಾಮೀನು ಸಿಗದೆ ಜೈಲಿನಲ್ಲೇ ಉಳಿಯುವಂತಾಗಿತ್ತು.

ಇದೀಗ ಒಂದು ವರ್ಷದ ಕಠಿಣ ಜೈಲು ವಾಸದ ನಂತರ ನ್ಯಾಯಾಲಯವು ಜಾಮೀನು ನೀಡಿದ್ದು, ರನ್ಯಾ ರಾವ್ ಜೈಲಿನಿಂದ ಹೊರಬರಲು ಸಿದ್ಧರಾಗಿದ್ದಾರೆ. ಹಗರಣದ ಆಳ ಮತ್ತು ವ್ಯಾಪ್ತಿ ದೊಡ್ಡದಾಗಿರುವುದರಿಂದ ತನಿಖಾ ಸಂಸ್ಥೆಗಳು ತನಿಖೆಯನ್ನು ಮುಂದುವರಿಸಿವೆ. ಸದ್ಯಕ್ಕೆ ಬಿಡುಗಡೆಯ ಭಾಗ್ಯ ಸಿಕ್ಕಿದ್ದರೂ, ವಿಚಾರಣೆಯ ಸಮಯದಲ್ಲಿ ನ್ಯಾಯಾಲಯ ವಿಧಿಸಿರುವ ಷರತ್ತುಗಳನ್ನು ಪಾಲಿಸಬೇಕಿದೆ. ಈ ಹೈಪ್ರೊಫೈಲ್ ಪ್ರಕರಣವು ಚಿತ್ರರಂಗದಲ್ಲಿ ಮತ್ತು ಸಾರ್ವಜನಿಕ ವಲಯದಲ್ಲಿ ಭಾರಿ ಸಂಚಲನ ಮೂಡಿಸಿತ್ತು.

Continue Reading

Latest

ಸರ್ಕಾರಿ ನೌಕರರಿಗೆ ಸಂಬಳ ಕೊಡದ ಸರ್ಕಾರ: ವಿಜಯೇಂದ್ರ ವಾಗ್ದಾಳಿ

VISTARANEWS.COM


on

BJP State President B Y Vijayendra latest statement in bengaluru

ಬೆಂಗಳೂರು: ರಾಜ್ಯಸರ್ಕಾರದ ದುರಾಡಳಿತ, ಮುಖ್ಯಮಂತ್ರಿ ಸಿದ್ದರಾಮಯ್ಯನವರ ಆರ್ಥಿಕ ನೀತಿಗಳ ವೈಫಲ್ಯ ಹಾಗೂ ಆಡಳಿತದಲ್ಲಿ ಭ್ರಷ್ಟಾಚಾರ ತಾಂಡವ ಆಡುತ್ತಿರುವ ಪರಿಣಾಮವಾಗಿ ರಾಜ್ಯದ ಸರಿಸುಮಾರು 5 ಲಕ್ಷ ಸರಕಾರಿ ನೌಕರರ ಪೈಕಿ ಬಹುತೇಕ ನೌಕರರಿಗೆ ಏಪ್ರಿಲ್ ತಿಂಗಳ 22 ರವರೆಗೆ ರಾಜ್ಯ ಸರ್ಕಾರ ಸಂಬಳವನ್ನೇ ನೀಡಿಲ್ಲ ಎಂದು ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ ಆರೋಪಿಸಿದ್ದಾರೆ.


ಈ ಕುರಿತು ಎಕ್ಸ್‌ ಖಾತೆಯಲ್ಲಿ ತಮ್ಮ ಹೇಳಿಕೆಯನ್ನು ಪೋಸ್ಟ್‌ ಮಾಡಿರುವ ಅವರು, ಕಳೆದ ವರ್ಷ ಎರಡು ತಿಂಗಳ ಅವಧಿಗೆ ಗ್ರಹಲಕ್ಷ್ಮಿ ಹಣವನ್ನೇ ನುಂಗಿ ಹಾಕಿದ ರಾಜ್ಯ ಸರ್ಕಾರ ಈ ವರ್ಷ ಬಾಗಲಕೋಟೆ ಹಾಗೂ ದಾವಣಗೆರೆ ದಕ್ಷಿಣ ವಿಧಾನಸಭಾ ಕ್ಷೇತ್ರಗಳ ಚುನಾವಣೆಯ ಕಾರಣಕ್ಕಾಗಿ ಮಾರ್ಚ್ ಅಂತ್ಯಕ್ಕೆ ಖಜಾನೆಯಲ್ಲಿದ್ದ ಹಣವನ್ನು ಗೃಹಲಕ್ಷ್ಮಿ ಫಲಾನುಭವಿಗಳಿಗೆ ಹಂಚಿಕೆ ಮಾಡಿದೆ ಎಂದಿದ್ದಾರೆ.


ಪರಿಣಾಮವಾಗಿ ರಾಜ್ಯ ಸರ್ಕಾರದ 5 ಲಕ್ಷ ಸರ್ಕಾರಿ ನೌಕರರಿಗೆ ತಿಂಗಳು ಕಳೆಯುತ್ತಾ ಬಂದರೂ ಸಂಬಳ ಕೊಡಲು ಸರ್ಕಾರಕ್ಕೆ ಸಾಧ್ಯವಾಗಿಲ್ಲ ಎಂದು ಟೀಕಿಸಿದ್ದಾರೆ.


ಮುಖ್ಯಮಂತ್ರಿಗಳ ಬದಲಾವಣೆ, ಸಂಪುಟ ಪುನರ್ ರಚನೆ, ಮುಸ್ಲಿಮರ ತುಷ್ಟಿಕರಣ ಹೀಗೆ ಹಲವು ಆಂತರಿಕ ಬಿಕ್ಕಟ್ಟಿನಿಂದ ಮುಖ್ಯಮಂತ್ರಿ ಹಾಗೂ ಉಪಮುಖ್ಯಮಂತ್ರಿ ವೈಯಕ್ತಿಕ ಪ್ರತಿಷ್ಠೆಯಲ್ಲಿ ಮುಳುಗಿ ಹೋಗಿದ್ದಾರೆ. ಇದರ ನೇರ ಪರಿಣಾಮ ರಾಜ್ಯದ ಜನರ ಮೇಲೆ ಉಂಟಾಗುತ್ತಿದೆ.


ಸರ್ಕಾರಿ ನೌಕರರಿಗೆ ಸಂಬಳವನ್ನೇ ಕೊಡಲು ಸಾಧ್ಯವಾಗದ ಈ ಸರಕಾರ ಈ ವರ್ಷ ಬಿರು ಬೇಸಿಗೆ ಹಾಗೂ ಬರದ ಛಾಯೆಯಲ್ಲಿ ಈಗಾಗಲೇ ಬಸವಳಿದು ಹೋಗಿರುವ ರಾಜ್ಯದ ಜನರನ್ನು ದೇವರೇ ಕಾಪಾಡಬೇಕು ಎಂದಿದ್ದಾರೆ.


ಪ್ರತಿಪಕ್ಷವಾಗಿ ಬಿಜೆಪಿ ಸರ್ಕಾರವನ್ನು ಬಡಿದೆಬ್ಬಿಸಿ ಕುಡಿಯುವ ನೀರಿಗೂ ಪರಿತಪಿಸುತ್ತಿರುವ ಜನ , ಜಾನುವಾರು ನೆರವಿಗೆ ಮುಂದಾಗುವಂತೆ ಹೋರಾಟ ನಡೆಸಲು ಬದ್ಧವಾಗಿದೆ ಎಂದು ವಿಜಯೇಂದ್ರ ಹೇಳಿದ್ದಾರೆ.

Continue Reading
Advertisement
Latest8 hours ago

ಫರ್ಮಾನ್ ಖಾನ್ ಜೊತೆ ಮದುವೆಯಾದ ಒಂದೇ ತಿಂಗಳಲ್ಲಿ ಮೊನಾಲಿಸಾ ಭೋಸ್ಲೆ ಗರ್ಭಿಣಿ!

Latest8 hours ago

ಎಸ್ಎಸ್ಎಲ್‌ಸಿ: ಹಿಂದಿಗೆ ಈ ಬಾರಿ ಗ್ರೇಡ್‌ ಬದಲು ಅಂಕ: ಸಚಿವ ಮಧು ಬಂಗಾರಪ್ಪ ಸ್ಪಷ್ಟನೆ

Latest9 hours ago

ಇರಾನ್‌ ಸರಕು ಸಾಗಣೆ ಹಡಗಿನ ಮೇಲೆ ಗುಂಡಿನ ದಾಳಿ: ಅಮೆರಿಕ ವಿರುದ್ಧ ಆಕ್ರೋಶ

Latest9 hours ago

ಹೋಮ್‌ಸ್ಟೇನಲ್ಲಿ ಅತ್ಯಾಚಾರ: ಸುತ್ತೋಲೆ ಹೊರಡಿಸಲಾಗಿದೆ ಎಂದ ಸಚಿವ ಪರಮೇಶ್ವರ್‌

Latest10 hours ago

ಜೈಲಿನಲ್ಲಿದ್ದುಕೊಂಡೆ ವಿಧ್ವಂಸ ಕೃತ್ಯಕ್ಕೆ ಸಂಚು: 7 ಆರೋಪಿಗಳಿಗೆ ಕಠಿಣ ಶಿಕ್ಷೆ ಪ್ರಕಟಿಸಿದ ಎನ್‌ ಐ ಎ ಕೋರ್ಟ್

Latest10 hours ago

ಸಚಿವ ಪ್ರಲ್ಹಾದ ಜೋಶಿ ಮನವಿಗೆ ಸ್ಪಂದನೆ; “ಧಾರವಾಡ ಆಕಾಶವಾಣಿ ಕೇಂದ್ರ” ಸ್ಥಳಾಂತರಿಸದಿರಲು ನಿರ್ಧಾರ

Latest10 hours ago

ಚಿನ್ನ ಕಳ್ಳ ಸಾಗಣೆ: ನಟಿ ರನ್ಯಾರಾವ್‌ ಗೆ ಸಿಕ್ತು ಜಾಮೀನು

Latest10 hours ago

ತಮಿಳುನಾಡು: ಯಾರು ಹಿತವರು ಈ ಮೂವರೊಳಗೆ?:dmk; aiadmk; tvk

Latest11 hours ago

ಗೋಲ್ಡ್ ಸ್ಮಗ್ಲಿಂಗ್ ಹಗರಣ: ನಟಿ ರನ್ಯಾ ರಾವ್​​ಗೆ ಜಾಮೀನು ಮಂಜೂರು ಮಾಡಿದ ನ್ಯಾಯಾಲಯ!

ಅವಿಭಾಗೀಕೃತ11 hours ago

“ನಿಮ್ಮಿಂದಲೇ ಟ್ರಾಫಿಕ್‌ ಜಾಮ್!‌ ಗೆಟ್‌ ಔಟ್‌” ಎಂದು ಸಚಿವರನ್ನು ನಿಂದಿಸಿದ ಮಹಿಳೆ

galipata neetu
ಕಿರುತೆರೆ2 years ago

Kanyadana Serial: ಕಿರುತೆರೆಗೆ ಮತ್ತೆ ಎಂಟ್ರಿ ಕೊಟ್ಟ ʻಗಾಳಿಪಟʼ ಖ್ಯಾತಿಯ ʻನೀತುʼ!

Kannada Serials
ಕಿರುತೆರೆ3 years ago

Kannada Serials TRP: 2ನೇ ಸ್ಥಾನದಲ್ಲಿ 2 ಧಾರಾವಾಹಿಗಳು; ಟಿಆರ್‌ಪಿ ರೇಸ್‌ನಲ್ಲಿಲ್ಲ ಭಾಗ್ಯಲಕ್ಷ್ಮೀ!

Sharmitha Gowda in bikini
ಕಿರುತೆರೆ3 years ago

Geetha Serial Kannada: ನಿದ್ದೆ ಕದ್ದ ಚೋರಿ! ನಟಿ `ಭಾನುಮತಿ’ ಹಾಟ್‌ ಪೋಟೊಗಳಿಗೆ ಫ್ಯಾನ್ಸ್ ಫುಲ್ ಫಿದಾ

Kannada Serials
ಕಿರುತೆರೆ3 years ago

Kannada Serials TRP: ನಾಲ್ಕನೇ ಸ್ಥಾನಕ್ಕೆ ಕುಸಿತ ಕಂಡ ʻಸೀತಾ ರಾಮʼ; ಟಿಆರ್‌ಪಿ ರೇಸ್‌ಗೆ ʻಭಾಗ್ಯಲಕ್ಷ್ಮಿʼ ಬ್ಯಾಕ್‌!

Bigg Boss- Saregamapa 20 average TRP
ಕಿರುತೆರೆ3 years ago

Kannada Serials TRP: ಏಳನೇ ಸ್ಥಾನಕ್ಕೆ ʻಅಮೃತಧಾರೆʼ ಕುಸಿತ; ಬಿಗ್‌ ಬಾಸ್‌-ಸರಿಗಮಪ ಟಿಆರ್‌ಪಿ ಎಷ್ಟು?

Kannada Serials
ಕಿರುತೆರೆ3 years ago

Kannada Serials TRP: ಟಿಆರ್‌ಪಿಯಲ್ಲಿ ʻಭಾಗ್ಯಲಕ್ಷ್ಮೀʼ ಹವಾ; ʻಪುಟ್ಟಕ್ಕನ ಮಕ್ಕಳುʼ ಧಾರಾವಾಹಿಗೆ ಸಂಕಷ್ಟ!

Bigg Boss' dominates TRP; Sita Rama fell to the sixth position
ಕಿರುತೆರೆ2 years ago

Kannada Serials TRP: ಟಿಆರ್‌ಪಿಯಲ್ಲಿ ʻಬಿಗ್ ಬಾಸ್ʼದೇ ಮೇಲುಗೈ; 6ನೇ ಸ್ಥಾನಕ್ಕೆ ಕುಸಿದ ʻಸೀತಾ ರಾಮʼ

geetha serial Dhanush gowda engagement
ಕಿರುತೆರೆ2 years ago

Dhanush Gowda: ಗೀತಾ ಧಾರಾವಾಹಿ ನಟನ ನಿಶ್ಚಿತಾರ್ಥ; ಭವ್ಯಾಳ ಕಮೆಂಟ್‌ ಬಾಕ್ಸ್‌ ಆಫ್‌!

Kannada Serials
ಕಿರುತೆರೆ3 years ago

Kannada Serials TRP: ಟಿಆರ್‌ಪಿಯಲ್ಲಿ ಏರಿಕೆ ಕಂಡ ʻಅಮೃತಧಾರೆʼ; ʻಗಟ್ಟಿಮೇಳʼಕ್ಕೆ ನಾಲ್ಕನೇ ಸ್ಥಾನ!

varun
ಕಿರುತೆರೆ2 years ago

Brindavana Serial: ʼಬೃಂದಾವನʼ ಧಾರಾವಾಹಿಯಲ್ಲಿ ದೊಡ್ಡ ಟ್ವಿಸ್ಟ್‌; ಪ್ರಮುಖ ಪಾತ್ರಧಾರಿಯೇ ಬದಲು

Action Prince Dhruva Sarja much awaited film Martin to hit the screens on October 11
ಸಿನಿಮಾ2 years ago

Martin Movie : ಆ್ಯಕ್ಷನ್‌ ಪ್ರಿನ್ಸ್‌ ಧ್ರುವ ಸರ್ಜಾ ಅಭಿನಯದ ಬಹು ನಿರೀಕ್ಷಿತ ʻಮಾರ್ಟಿನ್ʼ ಚಿತ್ರ ಅಕ್ಟೋಬರ್ 11ರಂದು ತೆರೆಗೆ

Sudeep's birthday location shift
ಸ್ಯಾಂಡಲ್ ವುಡ್2 years ago

Kichcha Sudeepa: ಸುದೀಪ್‌ ಬರ್ತ್‌ ಡೇ ಲೊಕೇಶನ್‌ ಶಿಫ್ಟ್; ದರ್ಶನ್‌ ಭೇಟಿಗೆ ಬಳ್ಳಾರಿ ಜೈಲಿಗೆ ಹೋಗ್ತಾರಾ ಕಿಚ್ಚ

Actor Darshan
ಸ್ಯಾಂಡಲ್ ವುಡ್2 years ago

Actor Darshan : ಬಿಗಿ ಭದ್ರತೆಯಲ್ಲಿ ಪರಪ್ಪನ ಅಗ್ರಹಾರದಿಂದ ದರ್ಶನ್‌ ಬಳ್ಳಾರಿಗೆ ಸ್ಥಳಾಂತರ; ಸೆಲ್‌ನಲ್ಲಿ ಏನೆಲ್ಲ ವ್ಯವಸ್ಥೆ ಇದೆ ಗೊತ್ತಾ?

ಮಳೆ2 years ago

Karnataka rain : ವಿಜಯನಗರದಲ್ಲಿ ಮಳೆ ಅವಾಂತರ; ಹರಿಯುವ ಹಳ್ಳದಲ್ಲೇ ಶವ ಸಾಗಿಸಿದ ಗ್ರಾಮಸ್ಥರು

karnataka Weather Forecast
ಮಳೆ2 years ago

Karnataka Weather : ಭೀಮಾನ ಅಬ್ಬರಕ್ಕೆ ನಲುಗಿದ ನೆರೆ ಸಂತ್ರಸ್ತರು; ನಾಳೆಗೆ ಇಲ್ಲೆಲ್ಲ ಮಳೆ ಅಲರ್ಟ್‌

Bellary news
ಬಳ್ಳಾರಿ2 years ago

Bellary News : ಫಿಲ್ಮಂ ಸ್ಟೈಲ್‌ನಲ್ಲಿ ಕಾಡಿನಲ್ಲಿ ನಿಧಿ ಹುಡುಕಾಟ; ಅತ್ಯಾಧುನಿಕ ಟೆಕ್ನಾಲಜಿ ಬಳಕೆ ಮಾಡಿದ ಖದೀಮರ ಗ್ಯಾಂಗ್‌

Maravoor bridge in danger Vehicular traffic suspended
ದಕ್ಷಿಣ ಕನ್ನಡ2 years ago

Maravoor Bridge : ಕಾಳಿ ನದಿ ಸೇತುವೆ ಬಳಿಕ ಅಪಾಯದಲ್ಲಿದೆ ಮರವೂರು ಸೇತುವೆ; ವಾಹನ ಸಂಚಾರ ಸ್ಥಗಿತ

Wild Animals Attack
ಚಿಕ್ಕಮಗಳೂರು2 years ago

Wild Animals Attack : ಮಲೆನಾಡಲ್ಲಿ ಕಾಡಾನೆಯ ದಂಡು; ತೋಟಕ್ಕೆ ತೆರಳುವ ಕಾರ್ಮಿಕರಿಗೆ ಎಚ್ಚರಿಕೆ

Karnataka Weather Forecast
ಮಳೆ2 years ago

Karnataka Weather : ಮಳೆಯಾಟಕ್ಕೆ ಮುಂದುವರಿದ ಮಕ್ಕಳ ಗೋಳಾಟ; ಆಯ ತಪ್ಪಿದರೂ ಜೀವಕ್ಕೆ ಅಪಾಯ

assault case
ಬೆಳಗಾವಿ2 years ago

Assault Case : ಬೇರೊಬ್ಬ ಯುವತಿ ಜತೆಗೆ ಸಲುಗೆ; ಪ್ರಶ್ನಿಸಿದ್ದಕ್ಕೆ ಪತ್ನಿಗೆ ಮನಸೋ ಇಚ್ಛೆ ಥಳಿಸಿದ ಪಿಎಸ್‌ಐ

ಟ್ರೆಂಡಿಂಗ್‌