congress-plan-for-parliament-election: Is it Sumalatha VS Ramya in Mandya?Loksabha Election 2024: ಲೋಕಸಭೆಗೆ ಕಾಂಗ್ರೆಸ್‌ ತಯಾರಿ; ಮಂಡ್ಯದಲ್ಲಿ ಸುಮಲತಾ ವಿರುದ್ಧ ರಮ್ಯ? - Vistara News

ಪ್ರಮುಖ ಸುದ್ದಿ

Loksabha Election 2024: ಲೋಕಸಭೆಗೆ ಕಾಂಗ್ರೆಸ್‌ ತಯಾರಿ; ಮಂಡ್ಯದಲ್ಲಿ ಸುಮಲತಾ ವಿರುದ್ಧ ರಮ್ಯ?

ಲೋಕಸಭಾ ಚುನಾವಣೆ: ವಿಧಾನಸಭಾ ಚುನಾವಣೆಯಲ್ಲಿ ಗೆಲುವು ಸಾಧಿಸಿದ ಹುಮ್ಮಸ್ಸಿನಲ್ಲಿರುವ ಕಾಂಗ್ರೆಸ್‌ ಲೋಕಸಭಾ ಚುನಾವಣೆಗೆ ಸಿದ್ಧವಾಗುತ್ತಿದೆ. ಯಾವ ಕ್ಷೇತ್ರಕ್ಕೆ ಯಾರು ಎಂಬ ಚರ್ಚೆ ಶುರುವಾಗಿದೆ.

VISTARANEWS.COM


on

Is it Sumalatha Vs Ramya in Mandya in Loksabha Election
ಮಹತ್ವದ, ಕುತೂಹಲಕರ ಸುದ್ದಿಗಾಗಿ ಫಾಲೊ ಮಾಡಿ
Koo

ಬೆಂಗಳೂರು: ರಾಜ್ಯ ವಿಧಾನಸಭಾ ಚುನಾವಣೆಯಲ್ಲಿ (Karnataka Election 2023) 224 ಸ್ಥಾನಗಳ ಪೈಕಿ 135ರಲ್ಲಿ ಗೆಲುವು ಸಾಧಿಸಿ ಬೀಗುತ್ತಿರುವ ಕಾಂಗ್ರೆಸ್‌ ತನ್ನ ಗೆಲುವಿನ ಅಭಿಯಾನವನ್ನು (Congress politics) ಲೋಕಸಭಾ ಚುನಾವಣೆಗೂ (Loksabha Election 2024) ಮುಂದುವರಿಸಲು ಕಾರ್ಯತಂತ್ರ ರೂಪಿಸಿದೆ. ವಿಧಾನಸಭಾ ಚುನಾವಣೆಯಲ್ಲಿ ಸಾಕಷ್ಟು ಮೊದಲೇ ಕಾರ್ಯತಂತ್ರಗಳನ್ನು ರೂಪಿಸಿ ಜನರ ಮನಸ್ಸಿನಲ್ಲಿ ಅಚ್ಚೊತ್ತುವ ಮೂಲಕ ಗೆಲುವನ್ನು ದಾಖಲಿಸಿದ ಪಕ್ಷ ಲೋಕಸಭಾ ಚುನಾವಣೆಗೂ ಈಗಿನಿಂದಲೇ ತಯಾರಿಗೆ ಮುಂದಾಗಿದೆ. ಅದರಲ್ಲೂ ಮುಖ್ಯವಾಗಿ ಕ್ಷೇತ್ರವಾರು ಯಾರ ವಿರುದ್ಧ ಯಾರನ್ನು ನಿಲ್ಲಿಸಬೇಕು ಎಂಬ ವಿಚಾರದಲ್ಲಿ ಚರ್ಚೆಗಳು ಆರಂಭವಾಗಿವೆ.

2019ರ ಲೋಕಸಭಾ ಚುನಾವಣೆಯಲ್ಲಿ 28 ಲೋಕಸಭಾ ಕ್ಷೇತ್ರಗಳ ಪೈಕಿ ಬಿಜೆಪಿ 25ರಲ್ಲಿ ಗೆಲುವು ಸಾಧಿಸಿತ್ತು. ಹಾಸನದಲ್ಲಿ ಜೆಡಿಎಸ್‌ನ ಎಚ್.ಡಿ. ರೇವಣ್ಣ, ರಾಮನಗರದಲ್ಲಿ ಕಾಂಗ್ರೆಸ್‌ನ ಡಿ.ಕೆ. ಸುರೇಶ್‌, ಮಂಡ್ಯದಲ್ಲಿ ಪಕ್ಷೇತರ ಅಭ್ಯರ್ಥಿ ಸುಮಲತಾ ಅವರು ಗೆಲುವು ಸಾಧಿಸಿದರು. ಸುಮಲತಾ ಈಗ ಬಿಜೆಪಿ ಬೆಂಬಲಿಸುತ್ತಿದ್ದು, ಮುಂದಿನ ಚುನಾವಣೆಯಲ್ಲಿ ಬಿಜೆಪಿ ಪಕ್ಷದಿಂದಲೇ ಕಣಕ್ಕಿಳಿಯುವ ಸಾಧ್ಯತೆ ಇದೆ.

ರಾಜ್ಯದಲ್ಲಿ ಜನರಿಂದ ಮೂಡಿಬಂದಿರುವ ಉತ್ತಮ ಅಭಿಪ್ರಾಯವನ್ನು ಮತವಾಗಿ ಉಳಿಸಿಕೊಳ್ಳುವ ನಿಟ್ಟಿನಲ್ಲಿ ಪ್ರಯತ್ನಗಳನ್ನು ನಡೆಸುವಂತೆ ಈಗಾಗಲೇ ಕಾಂಗ್ರೆಸ್‌ ನಾಯಕರು ಸೂಚನೆ ನೀಡಿದ್ದಾರೆ. ಇದು ಎಲ್ಲಿವರೆಗೆ ಹೋಗಿದೆ ಎಂದರೆ ಸಚಿವ ಸಂಪುಟ ವಿಸ್ತರಣೆಯಲ್ಲೂ ಮುಂದಿನ ಲೋಕಸಭಾ ಚುನಾವಣೆಯದ್ದೇ ಜಪ ಮಾಡಲಾಗಿದೆ.

ಕಾಂಗ್ರೆಸ್‌ ಟಾರ್ಗೆಟ್‌ 20 ಸೀಟು

ಕಳೆದ ಬಾರಿ ಒಂದೇ ಸ್ಥಾನದಲ್ಲಿ ಗೆದ್ದಿದ್ದ ಕಾಂಗ್ರೆಸ್‌ ಈ ಬಾರಿ 20 ಸ್ಥಾನಗಳಲ್ಲಿ ಗೆಲ್ಲಬೇಕು ಎನ್ನುವ ಪ್ಲ್ಯಾನ್‌ ಹಾಕಿಕೊಂಡಿದೆ. ಈ ಬಾರಿ ಅದು 42% ಮತಗಳನ್ನು ಪಡೆದುಕೊಂಡಿರುವುದು ನೋಡಿದರೆ, ವಿಧಾನಸಭಾ ಕ್ಷೇತ್ರವಾರು ನೋಡಿದರೆ ಇದು ಕಷ್ಟಸಾಧ್ಯವಲ್ಲ. ಆದರೆ, ಕರ್ನಾಟಕಕ್ಕೆ ಮತ್ತು ಕೇಂದ್ರಕ್ಕೆ ಪ್ರತ್ಯೇಕವಾದ ಯೋಚನೆಗಳೊಂದಿಗೆ ಜನರು ಮತ ಹಾಕುವುದರಿಂದ ಅಷ್ಟರ ಮಟ್ಟಿಗೆ ಸೀಟು ಬರಬಹುದೇ ಎನ್ನುವ ಸಂಶಯ ಕಾಂಗ್ರೆಸ್‌ನ ಒಳಗೂ ಇದೆ. ಆದರೆ, ಪ್ರಯತ್ನ ಪಟ್ಟರೆ ಕನಿಷ್ಠ 15 ಸೀಟು ಆದರೂ ಬರಬಹುದು ಎನ್ನುವ ನಿರೀಕ್ಷೆ ಪಕ್ಷದ್ದು. ಕಳೆದ ಬಾರಿ ಜೆಡಿಎಸ್‌ ಜತೆಗೂ ಸಂಸತ್‌ ಚುನಾವಣೆಗೆ ಸ್ಪರ್ಧಿಸಿದ್ದ ಕಾಂಗ್ರೆಸ್‌ ಅದು ಕೂಡಾ ಹಿನ್ನಡೆಯಾಯಿತು ಎಂಬ ಅಭಿಪ್ರಾಯದಲ್ಲಿದೆ. ಹೀಗಾಗಿ ಈ ಬಾರಿ ಸ್ವತಂತ್ರವಾಗಿ ಕಣಕ್ಕಿಳಿಯುವುದು ಕೂಡಾ ಲಾಭ ತರಲಿದೆ ಎಂಬ ನಿರೀಕ್ಷೆ ಹೊತ್ತಿದೆ.

ಕ್ಷೇತ್ರವಾರು ಫೈಟ್‌

ಈ ಬಾರಿ ಕಾಂಗ್ರೆಸ್‌ ಒಟ್ಟಾರೆಯಾಗಿ ಸ್ಪರ್ಧೆ ಮಾಡದೆ ಕ್ಷೇತ್ರವಾರು ಪ್ಲ್ಯಾನಿಂಗ್‌ ಮಾಡಲು ನಿರ್ಧರಿಸಿದೆ. ಈಗಿನಿಂದಲೇ ಹಾಲಿ ಸಂಸದರದ ಬಲ ಮತ್ತು ದೌರ್ಬಲ್ಯಗಳನ್ನು ಅಧ್ಯಯನ ಮಾಡಲಾಗುತ್ತಿದೆ. ಜತೆಗೆ ಅವರ ವಿರುದ್ಧ ಕಾಂಗ್ರೆಸ್‌ ನಿಂದ ಯಾರನ್ನು ಕಣಕ್ಕಿಳಿಸಬಹುದು ಎಂಬ ಚರ್ಚೆಯೂ ಆರಂಭಗೊಂಡಿದೆ.

ಪ್ರತಿಯೊಂದು ಕ್ಷೇತ್ರದಲ್ಲಿ ಯಾರ ವಿರುದ್ಧ ಯಾರು ಎಂಬ ವಿಚಾರ ಚರ್ಚೆಯಲ್ಲಿದೆ. ಸದ್ಯಕ್ಕೆ ಬಿಜೆಪಿ ಸಂಸದರಾದ ತೇಜಸ್ವಿ ಸೂರ್ಯ, ಪ್ರತಾಪ್ ಸಿಂಹ, ಬಿ.ವೈ. ರಾಘವೇಂದ್ರ, ಪ್ರಹ್ಲಾದ ಜೋಶಿ ಅವರ ವಿರುದ್ಧ ಪ್ರಬಲ ಅಭ್ಯರ್ಥಿ ಕಣಕ್ಕೆ ಇಳಿಸಲು ಪ್ಲ್ಯಾನ್‌ ರೂಪಿಸಲಾಗಿದೆ. ಸುಮಲತಾ ವಿರುದ್ಧ ಅತ್ಯಂತ ಕಠಿಣ ಅಭ್ಯರ್ಥಿಯನ್ನು ಇಳಿಸುವುದು ಕಾಂಗ್ರೆಸ್‌ ಚಿಂತನೆ.

ಯಾರ ವಿರುದ್ಧ ಯಾರ ಸ್ಪರ್ಧೆ?

ತೇಜಸ್ವಿ ಸೂರ್ಯ ವಿರುದ್ಧ ಸೌಮ್ಯಾ ರೆಡ್ಡಿ?

ಬೆಂಗಳೂರು ದಕ್ಷಿಣ ಲೋಕಸಭಾ ಕ್ಷೇತ್ರದಲ್ಲಿ ಈಗ ಬಿಜೆಪಿಯ ರಾಷ್ಟ್ರೀಯ ಯುವ ಮೋರ್ಚಾ ಅಧ್ಯಕ್ಷರಾಗಿರುವ ತೇಜಸ್ವಿ ಸೂರ್ಯ ಅವರ ವಿರುದ್ಧ ಜಯನಗರದ ಮಾಜಿ ಶಾಸಕಿ ಸೌಮ್ಯಾ ರೆಡ್ಡಿ ಅವರನ್ನು ಕಣಕ್ಕಿಳಿಸಲು ಚಿಂತನೆ ನಡೆದಿದೆ. ಕಳೆದ ಚುನಾವಣೆಯಲ್ಲಿ ಸೌಮ್ಯ ರೆಡ್ಡಿ ಅವರು ಕೇವಲ 16 ಮತಗಳಿಂದ ಸೋಲು ಕಂಡಿದ್ದರು. ಅವರ ತಂದೆ ರಾಮಲಿಂಗಾ ರೆಡ್ಡಿ ಅವರು ಈಗ ಸಚಿವರಾಗಿದ್ದಾರೆ. ಬೆಂಗಳೂರು ದಕ್ಷಿಣ ಭಾಗದಲ್ಲಿ ಇವರಿಬ್ಬರಿಗೂ ಚೆನ್ನಾಗಿ ಹಿಡಿತ ಇರುವುದರಿಂದ ಬಿಜೆಪಿಗೆ ಪ್ರಬಲ ಸ್ಪರ್ಧೆ ಒಡ್ಡಬಹುದು ಎನ್ನುವುದು ಕಾಂಗ್ರೆಸ್‌ ಲೆಕ್ಕಾಚಾರ.

ಬೆಂಗಳೂರು ಉತ್ತರದಲ್ಲಿ ಸದಾನಂದ ಗೌಡ VS ಕೃಷ್ಣ ಬೈರೇಗೌಡ

ಬೆಂಗಳೂರು ಉತ್ತರ ಕ್ಷೇತ್ರದಲ್ಲಿ ಮಾಜಿ ಕೇಂದ್ರ ಸಚಿವ ಡಿ.ವಿ. ಸದಾನಂದ ಗೌಡ ಅವರ ವಿರುದ್ಧವಾಗಿ ಬ್ಯಾಟರಾಯನಪುರದ ಹಾಲಿ ಶಾಸಕರಾಗಿರುವ ಕೃಷ್ಣಭೈರೇಗೌಡರನ್ನು ಕಣಕ್ಕಿಳಿಸಲು ಈಗಿನಿಂದಲೇ ಸಿದ್ಧಪಡಿಸುವ ಯೋಚನೆ ನಡೆಯುತ್ತಿದೆ. ಇದು ಒಕ್ಕಲಿಗರೇ ದೊಡ್ಡ ಪ್ರಮಾಣದಲ್ಲಿರುವ ಕ್ಷೇತ್ರವಾಗಿದೆ.

ಮೈಸೂರಿನಲ್ಲಿ ಪ್ರತಾಪಸಿಂಹ ವಿರುದ್ಧ ಯತೀಂದ್ರ?

ಮೈಸೂರು-ಕೊಡಗು ಲೋಕಸಭಾ ಕ್ಷೇತ್ರದಲ್ಲಿ ಈಗ ಬಿಜೆಪಿ ಹಿಡಿತ ಕಡಿಮೆಯಾಗಿದೆ ಎನ್ನುವುದು ಕಾಂಗ್ರೆಸ್‌ನ ಲೆಕ್ಕಾಚಾರ. ಇದಕ್ಕೆ ಪೂರಕವಾಗಿಯೇ ಕೊಡಗಿನ ಎರಡೂ ಕ್ಷೇತ್ರಗಳನ್ನು ಅದು ಗೆದ್ದುಕೊಂಡಿದೆ. ಹೀಗಾಗಿ ಲೋಕಸಭಾ ಕ್ಷೇತ್ರವನ್ನೂ ಗೆಲ್ಲಬಹುದು ಎಂಬ ಲೆಕ್ಕಾಚಾರದಲ್ಲಿ ಸಿಎಂ ಸಿದ್ದರಾಮಯ್ಯ ಅವರ ಪುತ್ರ ಯತೀಂದ್ರ ಸಿದ್ದರಾಮಯ್ಯ ಅವರನ್ನು ಕಣಕ್ಕಿಳಿಸಲು ಚಿಂತನೆ ನಡೆದಿದೆ.

ಶಿವಮೊಗ್ಗದಲ್ಲಿ ರಾಘವೇಂದ್ರ ವಿರುದ್ಧ ಗೀತಾ ಶಿವರಾಜ್‌ ಕುಮಾರ್?

Raghavendra VS Geetha Shivarajkumar

ಶಿವಮೊಗ್ಗ ಲೋಕಸಭಾ ಕ್ಷೇತ್ರದಲ್ಲಿ ಹಾಲಿ ಸಂಸದ ಬಿ.ವೈ. ರಾಘವೇಂದ್ರ ಅವರ ವಿರುದ್ಧ ಗೀತಾ ಶಿವರಾಜ್‌ ಕುಮಾರ್‌ ಅವರು ಕಣಕ್ಕಿಳಿಯಬೇಕು ಎನ್ನುವುದು ಕಾಂಗ್ರೆಸ್‌ ನಿರೀಕ್ಷೆ. ಕಳೆದ ಚುನಾವಣೆಯಲ್ಲಿ ಅವರು ಜೆಡಿಎಸ್‌ ಅಭ್ಯರ್ಥಿಯಾಗಿ ಸ್ಪರ್ಧಿಸಿದ್ದರು. ಈ ಬಾರಿ ಮಧು ಬಂಗಾರಪ್ಪ ಅವರು ಕಾಂಗ್ರೆಸ್‌ನಿಂದ ಗೆದ್ದಿದ್ದಾರೆ. ಹೀಗಾಗಿ ಇದನ್ನೇ ಬಂಡವಾಳ ಮಾಡಿಕೊಂಡು ಗೆಲುವು ಪಡೆಯುವ ಪ್ರಯತ್ನ ನಡೆಯಲಿದೆ. ಮಧು ಬಂಗಾರಪ್ಪ ಅವರಿಗೆ ಸಚಿವ ಸ್ಥಾನ ನೀಡದ ಹಿನ್ನೆಲೆಯಲ್ಲಿ ಕುಟುಂಬದಲ್ಲಿ ಸ್ವಲ್ಪ ಅಸಮಾಧಾನ ಇದೆ ಎಂಬ ಮಾತು ಕೇಳಿಬರುತ್ತಿತ್ತು. ಅದಾದ ಬಳಿಕ ಕಾಂಗ್ರೆಸ್‌ ನಾಯಕ, ರಾಜ್ಯ ಉಸ್ತುವಾರಿ ರಣದೀಪ್‌ ಸಿಂಗ್‌ ಸುರ್ಜೇವಾಲಾ ಅವರು ತಾವೇ ಶಿವರಾಜ್‌ ಕುಮಾರ್‌ ಅವರ ಮನೆಗೆ ಹೋಗಿ ಮಾತುಕತೆ ನಡೆಸಿದ್ದರು. ಈ ವೇಳೆ, ಶಿವಮೊಗ್ಗದಲ್ಲಿ ಕಣಕ್ಕಿಳಿಯಬೇಕು ಎಂಬ ವಿನಂತಿಯನ್ನೂ ಗೀತಾ ಅವರಿಗೆ ಮಾಡಿದ್ದಾರೆ ಎನ್ನಲಾಗಿದೆ.

ಹುಬ್ಬಳ್ಳಿ-ಧಾರವಾಡದಲ್ಲಿ ಪ್ರಲ್ಹಾದ್‌ ಜೋಶಿ ವಿರುದ್ಧ ಶೆಟ್ಟರ್‌?

pralhad Joshi vs Jagadish Shettar?

ಕೇಂದ್ರ ಸಚಿವರಾಗಿರುವ ಪ್ರಲ್ಹಾದ್‌ ಜೋಶಿ ಅವರ ವಿರುದ್ಧ ಹುಬ್ಬಳ್ಳಿ-ಧಾರವಾಡ ಕ್ಷೇತ್ರದಲ್ಲಿ ಜಗದೀಶ್‌ ಶೆಟ್ಟರ್‌ ಅವರನ್ನು ಕಣಕ್ಕಿಳಿಸಲು ಕಾಂಗ್ರೆಸ್‌ ಯೋಚಿಸುತ್ತಿದೆ. ಬಿಜೆಪಿಯಲ್ಲಿ ಟಿಕೆಟ್‌ ಸಿಗದೆ ಕಾಂಗ್ರೆಸ್‌ಗೆ ಹೋಗಿ ಸ್ಪರ್ಧಿಸಿದ್ದ ಶೆಟ್ಟರ್‌ ಅವರು ವಿಧಾನಸಭಾ ಚುನಾವಣೆಯಲ್ಲಿ ಸೋತಿದ್ದರು. ಈಗ ಪ್ರಲ್ಹಾದ್‌ ಜೋಶಿ ವಿರುದ್ಧ ಕಠಿಣ ಸ್ಪರ್ಧೆ ನೀಡಲು ಶೆಟ್ಟರ್‌ ಸೂಕ್ತವೇ ಎಂಬ ಚರ್ಚೆ ನಡೆದಿದೆ. ಒಟ್ಟಾರೆ ಕ್ಷೇತ್ರದಲ್ಲಿ ಕಾಂಗ್ರೆಸ್‌ಗೆ ಈ ಬಾರಿ ಬಲ ಬಂದಿರುವುದರಿಂದ ಅದು ಸಂಸತ್‌ ಚುನಾವಣೆಯಲ್ಲೂ ಮತವಾಗಿ ಉಳಿದರೆ ಗೆಲುವು ಸಾಧಿಸಬಹುದು ಎನ್ನುವುದು ಕೈ ಲೆಕ್ಕಾಚಾರ.

ಮಂಡ್ಯದಲ್ಲಿ ನಡೆಯುತ್ತಾ ರಮ್ಯ ಮತ್ತು ಸುಮಲತಾ ಕದನ?

ರಾಜ್ಯಾದ್ಯಂತ ಮಾತ್ರವಲ್ಲ ದೇಶದೆಲ್ಲೆಡೆ ಕುತೂಹಲ ಕೆರಳಿಸಿದ ಕಣ ಮಂಡ್ಯ. ಇಲ್ಲಿ ಕಳೆದ ಬಾರಿ ಪಕ್ಷೇತರರಾಗಿ ಕಣಕ್ಕಿಳಿದ ಸುಮಲತಾ ಅವರು ಜೆಡಿಎಸ್‌ನ ನಿಖಿಲ್‌ ಕುಮಾರಸ್ವಾಮಿ ಅವರನ್ನು ದೊಡ್ಡ ಅಂತರದಿಂದ ಸೋಲಿಸಿದ್ದರು. ಬಿಜೆಪಿ ನೇರವಾಗಿ ಸುಮಲತಾ ಅವರನ್ನು ಬೆಂಬಲಿಸಿದ್ದರು ಕಾಂಗ್ರೆಸ್‌ ಕಾರ್ಯಕರ್ತರು ಕೂಡಾ ಬೆಂಗಾವಲಾಗಿ ನಿಂತಿದ್ದರು.

ಈಗ ಸುಮಲತಾ ಅವರು ಅಧಿಕೃತವಾಗಿ ಬಿಜೆಪಿಯನ್ನು ಬೆಂಬಲಿಸುತ್ತಿದ್ದು, ಮುಂದಿನ ಚುನಾವಣೆಯಲ್ಲಿ ಬಿಜೆಪಿಯಿಂದಲೇ ಸ್ಪರ್ಧಿಸುವ ಸಾಧ್ಯತೆ ಇದೆ. ಇಲ್ಲಿ ಈಗ ಸುಮಲತಾ ಅವರ ಪ್ರಭಾವ ಕಡಿಮೆಯಾಗಿದ್ದರೆ ಕಾಂಗ್ರೆಸ್‌ ಬಲ ಹೆಚ್ಚಾಗಿದೆ. ಹೀಗಾಗಿ, ಸುಮಲತಾ ಅವರನ್ನು ಸೋಲಿಸಬಹುದು ಎನ್ನುವುದು ಕೈ ಲೆಕ್ಕಾಚಾರ. ಒಂದು ವೇಳೆ ಹೀಗಾದರೆ ಇಲ್ಲಿ ಕಾಂಗ್ರೆಸ್‌-ಜೆಡಿಎಸ್‌-ಬಿಜೆಪಿ ತ್ರಿಕೋನ ಸ್ಪರ್ಧೆ ಏರ್ಪಡಲಿದೆ. ಇಂಥ ಪರಿಸ್ಥಿತಿಯಲ್ಲಿ ಅತ್ಯಧಿಕ ಜನರನ್ನು ಸೆಳೆಯಬಲ್ಲ ಒಬ್ಬ ತಾರೆಯನ್ನು ಸುಮಲತಾ ವಿರುದ್ಧ ಕಣಕ್ಕಿಳಿಸಬೇಕು ಎಂಬ ಲೆಕ್ಕಾಚಾದರಲ್ಲಿದೆ ಕಾಂಗ್ರೆಸ್‌. ಹೀಗೆ ಯೋಚಿಸಿದಾಗ ಕಂಡದ್ದೇ ಕಾಂಗ್ರೆಸ್‌ನ ಸ್ಟಾರ್‌ ಪ್ರಚಾರಕಿ ಹಾಗೂ ಈ ಹಿಂದೆ ಮಂಡ್ಯದ ಸಂಸದೆಯಾಗಿ ದೊಡ್ಡ ಹೆಸರು ಮಾಡಿದ್ದ ಚಿತ್ರನಟಿ ರಮ್ಯಾ. ಮಂಡ್ಯದ ಜನರ ನಡುವೆ ನಿರಂತರ ಸಂಪರ್ಕ ಇಟ್ಟುಕೊಂಡಿರುವ ರಮ್ಯಾ ಅವರಿಗೆ ದೊಡ್ಡ ಪ್ರಮಾಣದಲ್ಲಿ ಅಭಿಮಾನಿಗಳಿದ್ದಾರೆ. ಇದನ್ನು ನಗದೀಕರಿಸಿಕೊಂಡು ಗೆಲ್ಲಬಹುದು ಎಂಬುದು ಕಾಂಗ್ರೆಸ್‌ ಪ್ಲ್ಯಾನ್‌. ರಮ್ಯಾ ಅವರು ಸುಮಲತಾ ವಿರುದ್ಧ ಕಣಕ್ಕಿಳಿಯುತ್ತಾರಾ ಎನ್ನುವುದು ಕುತೂಹಲ.

ಇದೇ ರೀತಿ ಬೇರೆ ಕ್ಷೇತ್ರಗಳಲ್ಲಿ ಯಾರನ್ನು ಕಣಕ್ಕಿಳಿಸಬೇಕು ಎಂಬ ಬಗ್ಗೆ ವಿಸ್ತೃತವಾದ ಚರ್ಚೆ ನಡೆಯುತ್ತಿದೆ.

ಇದನ್ನೂ ಓದಿ : Karnataka Election: ಕಾಂಗ್ರೆಸ್ ಗ್ಯಾರಂಟಿ ಯೋಜನೆಗಳ ಅನುಷ್ಠಾನ ಅಸಾಧ್ಯ: ಸುಮಲತಾ ಅಂಬರೀಶ್
ಇದನ್ನೂ ಓದಿ: Actress Ramya : ನಾನು ಮಂಡ್ಯದ ಗೌಡ್ತಿ, ನೀವೇ ನಂಗೊಬ್ಬ ಒಳ್ಳೆ ಗೌಡ್ರ ಹುಡುಗನ್ನ ಹುಡುಕಿ ಕೊಡಿ ಪ್ಲೀಸ್‌ ಅಂದ್ರು ರಮ್ಯಾ

ಕ್ಷಣ ಕ್ಷಣದ ಮಾಹಿತಿಗಾಗಿ Vistara News FaceBook ಪೇಜ್ ಫಾಲೋ ಮಾಡಿ
ಮಹತ್ವದ ಮಾಹಿತಿಗಾಗಿ ವಿಸ್ತಾರ ನ್ಯೂಸ್ ಆ್ಯಪ್ ಉಚಿತವಾಗಿ ಡೌನ್ ಲೋಡ್ ಮಾಡಿಕೊಳ್ಳಿ: Andriod App | IOS App
Continue Reading
Click to comment

Leave a Reply

Your email address will not be published. Required fields are marked *

ಕರ್ನಾಟಕ

ಮೊದಲ ಹಂತದ ಮತದಾನ ಬೆನ್ನಲ್ಲೇ ಕಾಂಗ್ರೆಸ್‌, ಬಿಜೆಪಿ ಅಲರ್ಟ್;‌ ‘ಉತ್ತರ’ದತ್ತ ಚಿತ್ತ, 13 ಸಚಿವರಿಗೆ ಟಾಸ್ಕ್!

ಕರ್ನಾಟಕದಲ್ಲಿ ಮೊದಲ ಹಂತದ ಮತದಾನ ಮುಕ್ತಾಯಗೊಂಡಿದ್ದು, ಎರಡನೇ ಹಂತದ ಚುನಾವಣೆಗೆ ಬಿಜೆಪಿ ಹಾಗೂ ಕಾಂಗ್ರೆಸ್‌ ಸಜ್ಜಾಗಿವೆ. ಉತ್ತರ ಕರ್ನಾಟಕದೆಲ್ಲೆಡೆ ಅಬ್ಬರದ ಪ್ರಚಾರದ ಮೂಲಕ ಜನರ ವಿಶ್ವಾಸ ಗಳಿಸುವುದು ಎರಡೂ ಪಕ್ಷಗಳ ನಾಯಕರ ಗುರಿಯಾಗಿದೆ.

VISTARANEWS.COM


on

Lok Sabha
Koo

ಬೆಂಗಳೂರು: ಕರ್ನಾಟಕದಲ್ಲಿ ಲೋಕಸಭೆ ಚುನಾವಣೆಯ (Lok Sabha Election 2024) ಮೊದಲ ಹಂತದ ಮತದಾನ ಮುಕ್ತಾಯವಾಗಿದೆ. ಇದುವರೆಗೆ ದಕ್ಷಿಣ ಕರ್ನಾಟಕ ಭಾಗದಲ್ಲಿಯೇ ಬೀಡುಬಿಟ್ಟಿದ್ದ ರಾಜಕೀಯ ಪಕ್ಷಗಳ ನಾಯಕರು ಈಗ ಉತ್ತರ ಕರ್ನಾಟಕದ ಕಡೆ ತೆರಳುತ್ತಿದ್ದಾರೆ. ಇನ್ನು, ಉತ್ತರ ಕರ್ನಾಟಕ ಭಾಗದಲ್ಲಿ ಹೆಚ್ಚು ಕ್ಷೇತ್ರಗಳಲ್ಲಿ ಗೆಲುವು ಸಾಧಿಸುವ ದಿಸೆಯಲ್ಲಿ ಕಾಂಗ್ರೆಸ್‌ ಅಲರ್ಟ್‌ ಆಗಿದ್ದು, ಹೆಚ್ಚುವರಿಯಾಗಿ 13 ಕ್ಷೇತ್ರಗಳಿಗೆ ಸಚಿವರಿಗೆ ಜವಾಬ್ದಾರಿ ನೀಡಿದೆ. ಬಿಜೆಪಿ ನಾಯಕರು ಕೂಡ ಉತ್ತರ ಕರ್ನಾಟಕದಲ್ಲೇ ಮೊಕ್ಕಾ ಹೂಡಿದ್ದಾರೆ.

13 ಸಚಿವರಿಗೆ ಕಾಂಗ್ರೆಸ್‌ ಟಾಸ್ಕ್‌

ಉತ್ತರ ಕರ್ನಾಟಕ ಭಾಗದಲ್ಲಿ ಹೆಚ್ಚು ಕ್ಷೇತ್ರಗಳನ್ನು ಗೆಲ್ಲಲು ಪಣ ತೊಟ್ಟಿರುವ ರಾಜ್ಯ ಕಾಂಗ್ರೆಸ್‌, 13 ಸಚಿವರಿಗೆ 13 ಕ್ಷೇತ್ರಗಳನ್ನು ಹೆಚ್ಚುವರಿಯಾಗಿ ಜವಾಬ್ದಾರಿ ನೀಡಿದೆ. ಹೆಚ್ಚುವರಿ ಉಸ್ತುವಾರಿಗಳನ್ನು ನೇಮಕ ಮಾಡಿ ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್‌ ಅವರು ಆದೇಶಿಸಿದ್ದಾರೆ. ಆ ಮೂಲಕ ಕಾಂಗ್ರೆಸ್ ನಾಯಕರನ್ನು ಸದ್ಬಳಕೆ ಮಾಡಿಕೊಂಡು ಬಿಜೆಪಿಗೆ ತಿರುಗೇಟು ನೀಡುವುದು ಕಾಂಗ್ರೆಸ್‌ ತಂತ್ರವಾಗಿದೆ.

ಕ್ಷೇತ್ರವಾರು ಜವಾಬ್ದಾರಿ ಹಂಚಿಕೆ ಹೀಗಿದೆ

ದಾವಣಗೆರೆಡಾ.ಜಿ. ಪರಮೇಶ್ವರ್
ಧಾರವಾಡದಿನೇಶ್‌ ಗುಂಡೂರಾವ್
ಕೆ.ಜೆ. ಜಾರ್ಜ್ಉತ್ತರ ಕನ್ನಡ
ಚಿಕ್ಕೋಡಿಕೆ.ಎಚ್‌.ಮುನಿಯಪ್ಪ
ಹಾವೇರಿಕೃಷ್ಣ ಭೈರೇಗೌಡ
ಬಳ್ಳಾರಿ ರಾಮಲಿಂಗಾರೆಡ್ಡಿ
ಬೆಳಗಾವಿಬೈರತಿ ಸುರೇಶ್
ಕೊಪ್ಪಳಎಂ.ಸಿ. ಸುಧಾಕರ್
ರಾಯಚೂರುಕೆ.ಎನ್.ರಾಜಣ್ಣ
ಬೀದರ್ಕೆ. ವೆಂಕಟೇಶ್
ಶಿವಮೊಗ್ಗಎನ್.‌ ಚೆಲುವರಾಯಸ್ವಾಮಿ
ವಿಜಯಪುರಎಚ್.ಸಿ.ಮಹಾದೇವಪ್ಪ
ಬಾಗಲಕೋಟೆಡಿ. ಸುಧಾಕರ್

ಕಲಬುರಗಿಗೆ ತೆರಳಿದ ಸಿದ್ದರಾಮಯ್ಯ

ಮೊದಲ ಹಂತದ ಮತದಾನ ಮುಗಿದ ಬೆನ್ನಲ್ಲೇ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಉತ್ತರ ಕರ್ನಾಟಕಕ್ಕೆ ತೆರಳಿದ್ದಾರೆ. ಸದ್ಯ, ಕಲಬುರಗಿಯಲ್ಲಿರುವ ಸಿದ್ದರಾಮಯ್ಯ ಬಳಿಕ ಇಂದೇ ತೇರದಾಳ, ರಬಕವಿ ಬನಹಟ್ಟಿಗೆ ತೆರಳಿ ಪ್ರಚಾರ ನಡೆಸಲಿದ್ದಾರೆ. ಬಾಗಲಕೋಟೆಯಲ್ಲಿ ಸಂಯುಕ್ತಾ ಪಾಟೀಲ್‌ ಅವರ ಪರ ಪ್ರಚಾರ ನಡೆಸಲಿರುವ ಸಿದ್ದರಾಮಯ್ಯ ಅವರು ಪ್ರಮುಖ ಕ್ಷೇತ್ರಗಳಲ್ಲಿ ಪ್ರಚಾರ ಮಾಡಲಿದ್ದಾರೆ ಎಂದು ತಿಳಿದುಬಂದಿದೆ.

ನಾಳೆಯಿಂದ ಮೋದಿ ಮೇನಿಯಾ

ಉತ್ತರ ಕರ್ನಾಟಕ, ಉತ್ತರ ಕನ್ನಡ ಸೇರಿ ಹಲವೆಡೆ ನರೇಂದ್ರ ಮೋದಿ ಅವರು ಅಬ್ಬರದ ಪ್ರಚಾರ ನಡೆಸಲಿದ್ದಾರೆ. ಏಪ್ರಿಲ್ 28 ರಂದು ಬೆಳಗಾವಿ ಸೇರಿದಂತೆ ರಾಜ್ಯದ ನಾಲ್ಕು ಸಮಾವೇಶದಲ್ಲಿ ಪ್ರಧಾನಿ ನರೇಂದ್ರ ಮೋದಿ ಅವರು ಭಾಗಿಯಾಗಲಿದ್ದಾರೆ. ಆದರೆ, ಏಪ್ರಿಲ್ 29ರಂದು ಒಂದೇ ಸಮಾವೇಶದಲ್ಲಿ ಭಾಗಿಯಾಗಲಿದ್ದಾರೆ. ಉತ್ತರ ಕನ್ನಡ ಜಿಲ್ಲೆಯ ಶಿರಸಿಯಲ್ಲಿ ಪಕ್ಷದ ಅಭ್ಯರ್ಥಿ ವಿಶ್ವೇಶ್ವರ ಹೆಗಡೆ ಕಾಗೇರಿ ಪರವಾಗಿ ಪ್ರಧಾನಿ ನರೇಂದ್ರ ಮೋದಿ ಮತಯಾಚನೆ ಮಾಡಲಿದ್ದಾರೆ. ಅಲ್ಲಿ ಮಧ್ಯಾಹ್ನ 1 ರಿಂದ 1.50ರ ವರೆಗೂ ನಡೆಯಲಿರುವ ಬೃಹತ್‌ ಸಮಾವೇಶದಲ್ಲಿ ಸಾರ್ವಜನಿಕರನ್ನುದ್ದೇಶಿಸಿ ಭಾಷಣ ಮಾಡಲಿದ್ದಾರೆ.

Lok Sabha Election

ಅಲ್ಲಿಂದ ದಾವಣಗೆರೆ ಜಿಲ್ಲೆಗೆ ಪ್ರಯಾಣ ಬೆಳೆಸಲಿರುವ ಪ್ರಧಾನಿ ನರೇಂದ್ರ ಮೋದಿ, ಮಧ್ಯಾಹ್ನ 3 ರಿಂದ 3.50 ವರೆಗೂ ನಡೆಯಲಿರುವ ಸಮಾವೇಶದಲ್ಲಿ ಭಾಗಿಯಾಗಲಿದ್ದಾರೆ. ಬಳಿಕ ಬಳ್ಳಾರಿ ಜಿಲ್ಲೆಗೆ ಪ್ರಧಾನಿ ಮೋದಿ ಪ್ರಯಾಣಿಸಲಿದ್ದಾರೆ. ಅಲ್ಲಿನ ಪುನೀತ್ ರಾಜ್‍ಕುಮಾರ್ ಆಟದ ಮೈದಾನದಲ್ಲಿ ಸಂಜೆ 5ರಿಂದ 5.50ರ ವರೆಗೂ ಮೋದಿ ಸಮಾವೇಶದಲ್ಲಿ ಮಾತನಾಡಲಿದ್ದಾರೆ.

ಏಪ್ರಿಲ್ 28ರಂದು ರಾತ್ರಿ ಬಳ್ಳಾರಿಯ ಹೊಸಪೇಟೆಯಲ್ಲೇ ನರೇಂದ್ರ ಮೋದಿ ವಾಸ್ತವ್ಯ ಹೂಡಲಿದ್ದಾರೆ. ಮರುದಿನ ಏಪ್ರಿಲ್‌ 29ರಂದು ಬಳ್ಳಾರಿಯಿಂದ ಬಾಗಲಕೋಟೆಗೆ ಪ್ರವಾಸ ಮಾಡಲಿರುವ ಮೋದಿ, ಬಾಗಲಕೋಟೆಯಲ್ಲಿ ಮಧ್ಯಾಹ್ನ 12 ರಿಂದ, 12.55 ರವರೆಗೂ ನಡೆಯಲಿರುವ ಸಮಾವೇಶದಲ್ಲಿ ಭಾಗಿಯಾಗಲಿದ್ದಾರೆ. ಮಧ್ಯಾಹ್ನ 2 ಗಂಟೆಗೆ ಬಾಗಲಕೋಟೆಯಿಂದ ಮಹಾರಾಷ್ಟ್ರಕ್ಕೆ‌ ಮೋದಿ ಪ್ರಯಾಣ ಬೆಳೆಸಲಿದ್ದಾರೆ.

ಇದನ್ನೂ ಓದಿ: Randeep Surjewala: ಕನ್ನಡಿಗರ ತೆರಿಗೆ ಹಣದಲ್ಲಿ ಸುರ್ಜೇವಾಲಾ ಟ್ರಿಪ್;‌ ಕೆರಳಿ ಕೆಂಡವಾದ ಬಿಜೆಪಿ!

Continue Reading

ಪ್ರಮುಖ ಸುದ್ದಿ

Mamata Banerjee: ಹೆಲಿಕಾಪ್ಟರ್‌ ಏರುವಾಗ ಬಿದ್ದ ಮಮತಾ ಬ್ಯಾನರ್ಜಿ, ಗಾಯ

Mamata Banerjee: ಕಳೆದ ಆರು ವಾರಗಳಲ್ಲಿ ಮಮತಾ ಬ್ಯಾನರ್ಜಿ ಬಿದ್ದು ಗಾಯಗೊಂಡಿರುವುದು ಇದು ಎರಡನೇ ಬಾರಿ. ಮಾರ್ಚ್ 14ರಂದು, 69 ವರ್ಷದ ತೃಣಮೂಲ ಕಾಂಗ್ರೆಸ್ (Trinamool Congress) ಮುಖ್ಯಸ್ಥೆ ಮಮತಾ ಕೋಲ್ಕತ್ತಾದ ತಮ್ಮ ಕಾಲಿಘಾಟ್ ನಿವಾಸದೊಳಗೆ ಬಿದ್ದು ಹಣೆ ಮತ್ತು ಮೂಗಿನ ಮೇಲೆ ಗಂಭೀರವಾದ ಗಾಯ ಮಾಡಿಕೊಂಡಿದ್ದರು.

VISTARANEWS.COM


on

mamata banerjee helicopter
Koo

ಕೋಲ್ಕತ್ತಾ: ಪಶ್ಚಿಮ ಬಂಗಾಳದ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ (West Bengal chief minister Mamata Banerjee) ಅವರು ಶನಿವಾರ ದುರ್ಗಾಪುರದಲ್ಲಿ ಹೆಲಿಕಾಪ್ಟರ್ (Helicopter) ಏರುತ್ತಿದ್ದಾಗ ಜಾರಿ ಬಿದ್ದು ಗಾಯ ಮಾಡಿಕೊಂಡಿದ್ದಾರೆ. ಹೆಲಿಕಾಪ್ಟರ್‌ ಏರಿ ತಮ್ಮ ಆಸನದಲ್ಲಿ ಕುಳಿತುಕೊಳ್ಳಲು ಮುಂದಾದಾಗ ನಿಯಂತ್ರಣ (Imbalance) ಕಳೆದುಕೊಂಡು ಮಮತಾ ಬಿದ್ದುಬಿಟ್ಟರು. ಮುಖ್ಯಮಂತ್ರಿಗೆ ಸಣ್ಣಪುಟ್ಟ ಗಾಯವಾಗಿದ್ದು, ಅವರ ಭದ್ರತಾ ಸಿಬ್ಬಂದಿ (Security) ಸಹಾಯ ಮಾಡಿದ್ದಾರೆ ಎಂದು ವರದಿಯಾಗಿದೆ.

ನಂತರ ಮಮತಾ ತಮ್ಮ ಮುಂದಿನ ಪ್ರಯಾಣವನ್ನು ಅಸನ್ಸೋಲ್‌ಗೆ ಮುಂದುವರಿಸಿದೃು ಎಂದು ಗೊತ್ತಾಗಿದೆ. ಕಳೆದ ಆರು ವಾರಗಳಲ್ಲಿ ಮಮತಾ ಬ್ಯಾನರ್ಜಿ ಬಿದ್ದು ಗಾಯಗೊಂಡಿರುವುದು ಇದು ಎರಡನೇ ಬಾರಿ. ಮಾರ್ಚ್ 14ರಂದು, 69 ವರ್ಷದ ತೃಣಮೂಲ ಕಾಂಗ್ರೆಸ್ (Trinamool Congress) ಮುಖ್ಯಸ್ಥೆ ಮಮತಾ ಕೋಲ್ಕತ್ತಾದ ತಮ್ಮ ಕಾಲಿಘಾಟ್ ನಿವಾಸದೊಳಗೆ ಬಿದ್ದು ಹಣೆ ಮತ್ತು ಮೂಗಿನ ಮೇಲೆ ಗಂಭೀರವಾದ ಗಾಯ ಮಾಡಿಕೊಂಡಿದ್ದರು. ಮಮತಾ ಅವರನ್ನು ಹಲವು ಗಂಟೆಗಳ ಕಾಲ ಆಸ್ಪತ್ರೆಗೆ ಸೇರಿಸಬೇಕಾಗಿ ಬಂದಿತ್ತು.

ಬ್ಯಾನರ್ಜಿಯವರ ಸಹೋದರ ಕಾರ್ತಿಕ್ ಬ್ಯಾನರ್ಜಿ ಬಂಗಾಳಿ ಸುದ್ದಿ ವಾಹಿನಿಯೊಂದಕ್ಕೆ ಮಾತನಾಡುತ್ತಾ, ಟಿಎಂಸಿ ನಾಯಕಿಗೆ ʼಸೆರೆಬ್ರಲ್ ಕನ್ಕ್ಯುಶನ್ʼ ಇತ್ತು ಮತ್ತು ಆಕೆಯ ಹಣೆ ಮತ್ತು ಮೂಗಿನ ಮೇಲೆ ತೀಕ್ಷ್ಣವಾದ ಗಾಯವಾಗಿದೆ, ತೀವ್ರವಾಗಿ ರಕ್ತಸ್ರಾವವಾಗಿದೆ ಎಂದು ತಿಳಿಸಿದ್ದರು.

ಆಸ್ಪತ್ರೆಯ ನಿರ್ದೇಶಕ ಮಣಿಮೋಯ್ ಬಂಡೋಪಾಧ್ಯಾಯ ಅವರು, ಆರಂಭದಲ್ಲಿ “ಹಿಂದಿನಿಂದ ತಳ್ಳಿದಂಥ ಅನುಭವದಿಂದಾಗಿ ಅವರ ಮನೆಯಲ್ಲಿ ಬಿದ್ದಿದ್ದಾರೆ” ಎಂದು ಹೇಳಿದರೆಂದು ವರದಿಯಾಗಿತ್ತು. ಇದು ಂಮತಾ ಅವರ ಬೀಳುವಿಕೆಯ ಬಗ್ಗೆ ದೊಡ್ಡ ಪ್ರಮಾಣದ ಗೊಂದಲ ಮತ್ತು ಊಹಾಪೋಹಗಳನ್ನು ಹುಟ್ಟುಹಾಕಿತ್ತು.

ಬಂದೋಪಾಧ್ಯಾಯ ಅವರು ನಂತರ ಸ್ಪಷ್ಟನೆ ನೀಡಿದ್ದು, ತಮ್ಮ ಹೇಳಿಕೆ ಬಗ್ಗೆ ಸ್ಪಷ್ಟನೆ ನೀಡಿದ್ದರು. “ಸಿಎಂ ಮಮತಾ ಅವರ ದೇಹವು ಹಿಂದಿನಿಂದ ತಳ್ಳುವ ಸಂವೇದನೆಯನ್ನು ಅನುಭವಿಸಿದೆ. ಇದು ತಲೆ ತಿರುಗುವುದಕ್ಕೆ ಸಮನಾದುದು. ಚಿಕಿತ್ಸೆ ನೀಡುವುದು ನಮ್ಮ ಕೆಲಸ ಮತ್ತು ನಾವು ಅದನ್ನು ಮಾಡಿದ್ದೇವೆ. ನಾನು ಹೇಳಿದ್ದನ್ನು ತಪ್ಪಾಗಿ ಅರ್ಥೈಸಲಾಗಿದೆ” ಎಂದು ಬಂಡೋಪಾಧ್ಯಾಯ ಹೇಳಿದ್ದರು.

ಕಳೆದ ಬಾರಿ ರಾಜ್ಯ ವಿಧಾನಸಭೆ ಚುನಾವಣೆ ಸಂದರ್ಭದಲ್ಲಿ ಮಮತಾ ಬ್ಯಾನರ್ಜಿ ಅವರಿಗೆ ಅಪಘಾತವೊಂದರಲ್ಲಿ ಕಾಲು ಫ್ರಾಕ್ಚರ್‌ ಆಗಿತ್ತು. ಆದರೆ ಮಮತಾ ಬ್ಯಾಂಡೇಜ್‌ ಧರಿಸಿದ ಕಾಲುಗಳ ಮೂಲಕವೇ ರಾಜ್ಯಾದ್ಯಂತ ಬಿರುಗಾಳಿಯಂತೆ ಓಡಾಡಿ ಪ್ರಚಾರ ನಡೆಸಿ ಅಧಿಕಾರಕ್ಕೆ ಮರಳಿದ್ದರು.

ಇದನ್ನೂ ಓದಿ: Trinamool Congress: ಮಮತಾ ಬ್ಯಾನರ್ಜಿಯನ್ನು ಅರೆಸ್ಟ್‌ ಮಾಡಿ; ಟಿಎಂಸಿ ಉಗ್ರ ಸಂಘಟನೆ ಎಂದು ಘೋಷಿಸಿ-ಬಿಜೆಪಿ ಆಗ್ರಹ

Continue Reading

ಕರ್ನಾಟಕ

Randeep Surjewala: ಕನ್ನಡಿಗರ ತೆರಿಗೆ ಹಣದಲ್ಲಿ ಸುರ್ಜೇವಾಲಾ ಟ್ರಿಪ್;‌ ಕೆರಳಿ ಕೆಂಡವಾದ ಬಿಜೆಪಿ!

Randeep Surjewala: ಲೋಕಸಭೆ ಚುನಾವಣೆ ಹಿನ್ನೆಲೆಯಲ್ಲಿ ರಾಜ್ಯ ಕಾಂಗ್ರೆಸ್ ಉಸ್ತುವಾರಿ ರಣದೀಪ್‌ ಸುರ್ಜೇವಾಲಾ ಅವರು ವಿಶೇಷ ವಿಮಾನಗಳಲ್ಲಿ ಓಡಾಡುತ್ತಿರುವುದಕ್ಕೆ ರಾಜ್ಯ ಬಿಜೆಪಿಯು ಆಕ್ರೋಶ ವ್ಯಕ್ತಪಡಿಸಿದೆ. ಕನ್ನಡಿಗರ ತೆರಿಗೆ ಹಣ ಪೋಲಾಗುತ್ತಿದೆ ಎಂದು ಅಸಮಾಧಾನ ವ್ಯಕ್ತಪಡಿಸಿದೆ.

VISTARANEWS.COM


on

Randeep Surjewala
Koo

ಬೆಂಗಳೂರು: ಕರ್ನಾಟಕದಲ್ಲಿ ಲೋಕಸಭೆ ಚುನಾವಣೆಯ (Lok Sabha Election) ಮೊದಲ ಹಂತದ ಮತದಾನ ಮುಗಿದ ಬೆನ್ನಲ್ಲೇ ರಾಜ್ಯ ಕಾಂಗ್ರೆಸ್‌ ಹಾಗೂ ಬಿಜೆಪಿ ಮಧ್ಯೆ ಜಟಾಪಟಿ ಮುಂದುವರಿದಿದೆ. ಅದರಲ್ಲೂ, ಕರ್ನಾಟಕ ಕಾಂಗ್ರೆಸ್‌ (Karnataka Congress) ಉಸ್ತುವಾರಿ ರಣದೀಪ್‌ ಸುರ್ಜೇವಾಲಾ ಅವರು ವಿಶೇಷ ವಿಮಾನಗಳಲ್ಲಿ ಓಡಾಡುತ್ತಿರುವುದಕ್ಕೆ ಕರ್ನಾಟಕ ಬಿಜೆಪಿ (Karnataka BJP) ಆಕ್ರೋಶ ವ್ಯಕ್ತಪಡಿಸಿದೆ. “ಕನ್ನಡಿಗರ ತೆರಿಗೆ ಹಣದಲ್ಲಿ ರಣದೀಪ್‌ ಸುರ್ಜೇವಾಲ (Randeep Surjewala) ಅವರು ಟ್ರಿಪ್‌ ಮಾಡುತ್ತಿದ್ದಾರೆ” ಎಂದು ಎಕ್ಸ್‌ ಸಾಮಾಜಿಕ ಜಾಲತಾಣದಲ್ಲಿ ಅಸಮಾಧಾನ ವ್ಯಕ್ತಪಡಿಸಿದೆ.

“ಕನ್ನಡಿಗರಿಗೆ ಬರ ಪರಿಹಾರ, ಅಭಿವೃದ್ಧಿಗೆ ಅನುದಾನ ಕೊಡಲು ಖಜಾನೆ ಖಾಲಿ ಮಾಡಿ, ಹಣವಿಲ್ಲ ಎಂದು ಕೂತಿರುವ ಕರ್ನಾಟಕ ಕಾಂಗ್ರೆಸ್ ಸರ್ಕಾರವು ಕಲೆಕ್ಷನ್‌ ಏಜೆಂಟ್ ಸುರ್ಜೇವಾಲಾ ಅವರ ಚುನಾವಣಾ ಪ್ರಚಾರಕ್ಕೆ ಸುತ್ತಾಡಲು ಸ್ಪೆಷಲ್ ಫ್ಲೈಟ್‌ಗಳ ವ್ಯವಸ್ಥೆಯನ್ನೇ ಮಾಡಿದೆ. ಎಟಿಎಂ ಸರ್ಕಾರ ಕೊಟ್ಟು ಕಳಿಸುವ ಲೂಟಿ ಹಣವನ್ನು ಚುನಾವಣೆಗಾಗಿ ದೇಶದ ತುಂಬ ತೆಗೆದುಕೊಂಡು ಹೋಗಿ ಹಂಚುವ ಜವಾಬ್ದಾರಿಯನ್ನೂ ನೀಡಲಾಗಿದೆಯೇ” ಎಂದು ಪ್ರಶ್ನಿಸಿದೆ.

“ಕನ್ನಡಿಗರು ಕುಡಿಯಲು ಹನಿ ನೀರಿಲ್ಲದೆ ಸತ್ತರೂ ಸಿದ್ದರಾಮಯ್ಯ ಸರ್ಕಾರಕ್ಕೆ ಚಿಂತೆ ಇಲ್ಲ. ಆದರೆ, ಹೈಕಮಾಂಡ್ ಹೇಳಿದಂತೆ ಕೇಳಿಕೊಂಡು ಕಪ್ಪ ಕಾಣಿಕೆ ಸಲ್ಲಿಸುತ್ತ, ಅವರ ಸೇವೆ ಮಾಡುತ್ತ, ಕುರ್ಚಿ ಉಳಿಸಿಕೊಳ್ಳುವುದೇ ಸಿದ್ದರಾಮಯ್ಯ ಅವರ ಗುರಿ” ಎಂದು ಸಾಮಾಜಿಕ ಜಾಲತಾಣದಲ್ಲಿ ಬಿಜೆಪಿ ಆಕ್ರೋಶ ವ್ಯಕ್ತಪಡಿಸಿದೆ. ರಣದೀಪ್‌ ಸುರ್ಜೇವಾಲಾ ಅವರ ಪ್ರವಾಸದ ವಿವರವನ್ನು ಬಿಜೆಪಿ ಹಂಚಿಕೊಂಡು ತಿರುಗೇಟು ನೀಡಿದೆ.

ಬರ ಪರಿಹಾರ; ಸಿಎಂ ಅಸಮಾಧಾನ

ಕೇಂದ್ರ ಸರ್ಕಾರವು ಕರ್ನಾಟಕಕ್ಕೆ 3,454 ಕೋಟಿ ರೂ. ಬರ ಪರಿಹಾರ ನೀಡಿರುವುದಕ್ಕೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅಸಮಾಧಾನ ವ್ಯಕ್ತಪಡಿಸಿದ್ದಾರೆ. “ರಾಜ್ಯದಲ್ಲಿ 35 ಸಾವಿರ ಕೋಟಿ ರೂ. ಮೊತ್ತದ ಬೆಳೆ ನಷ್ಟವಾಗಿದೆ. 48 ಸಾವಿರ ಹೆಕ್ಟೇರ್‌ ಬೆಳೆ ನಾಶ ಆಗಿದೆ. 223 ತಾಲೂಕುಗಳು ಬರಪೀಡಿತ ಎಂಬುದಾಗಿ ಘೋಷಣೆ ಮಾಡಿದ್ದೇವೆ. ಹಾಗಾಗಿ, ನಾವು ಕೇಂದ್ರ ಸರ್ಕಾರಕ್ಕೆ 18,172 ಕೋಟಿ ರೂ. ಪರಿಹಾರ ಕೇಳಿದ್ದೆವು. ಆದರೆ, ಈಗ ಕೇಂದ್ರ ಸರ್ಕಾರವು ನಾವು ಕೇಳಿದ ನಾಲ್ಕನೇ ಒಂದು ಭಾಗದಷ್ಟು ಮಾತ್ರ ಪರಿಹಾರ ನೀಡಿದೆ. ಇದು ತುಂಬ ಕಡಿಮೆ ಆಯಿತು. ಈ ಕುರಿತು ಅಧಿಕಾರಿಗಳ ಜತೆ ಚರ್ಚಿಸಿ ಮುಂದಿನ ನಿರ್ಧಾರ ತೆಗೆದುಕೊಳ್ಳುತ್ತೇವೆ” ಎಂಬುದಾಗಿ ಕಲಬುರಗಿಯಲ್ಲಿ ನಡೆದ ಸುದ್ದಿಗೋಷ್ಠಿಯಲ್ಲಿ ಸಿದ್ದರಾಮಯ್ಯ ತಿಳಿಸಿದರು.

ಮಲತಾಯಿ ಧೋರಣೆ ಎಂದ ಕೃಷ್ಣ ಭೈರೇಗೌಡ

ಕೇಂದ್ರ ಸರ್ಕಾರವು ಕಡಿಮೆ ಮೊತ್ತದ ಬರ ಪರಿಹಾರ ಬಿಡುಗಡೆ ಮಾಡಿದೆ ಎಂದು ಸಚಿವ ಕೃಷ್ಣ ಭೈರೇಗೌಡ ಅಸಮಾಧಾನ ವ್ಯಕ್ತಪಡಿಸಿದ್ದಾರೆ. “ಕೇಂದ್ರ ಸರ್ಕಾರ ಮಲತಾಯಿ ಧೋರಣೆ ಅನುಸರಿಸುತ್ತಿದೆ. ರಾಜ್ಯದಲ್ಲಿ 200ಕ್ಕೂ ಅಧಿಕ ತಾಲೂಕುಗಳನ್ನು ಬರಪೀಡಿತ ಎಂದು ಘೋಷಣೆ ಮಾಡಲಾಗಿದೆ. ಇಷ್ಟಿದ್ದರೂ ಕೇವಲ 3,454 ಕೋಟಿ ರೂ. ಬರ ಪರಿಹಾರ ಬಿಡುಗಡೆ ಮಾಡಿದೆ. ಈ ದುಡ್ಡು ಯಾವುದಕ್ಕೂ ಸಾಕಾಗುವುದಿಲ್ಲ” ಎಂದು ಅಸಮಾಧಾನ ವ್ಯಕ್ತಪಡಿಸಿದ್ದಾರೆ.

ಇದನ್ನೂ ಓದಿ: Drought Relief: 3,454 ಕೋಟಿ ರೂ. ಬರ ಪರಿಹಾರ; ‘ಅರೆಕಾಸಿನ ಮಜ್ಜಿಗೆ’ ಎಂದ ಸಿದ್ದರಾಮಯ್ಯ!

Continue Reading

ಕರ್ನಾಟಕ

Drought Relief: 3,454 ಕೋಟಿ ರೂ. ಬರ ಪರಿಹಾರ; ‘ಅರೆಕಾಸಿನ ಮಜ್ಜಿಗೆ’ ಎಂದ ಸಿದ್ದರಾಮಯ್ಯ!

Drought Relief: ಕರ್ನಾಟಕಕ್ಕೆ ಕೇಂದ್ರ ಸರ್ಕಾರವು ಕೊನೆಗೂ ಬರ ಪರಿಹಾರ ಬಿಡುಗಡೆ ಮಾಡಿದೆ. ರಾಜ್ಯಕ್ಕೆ ಒಟ್ಟು 3,454 ಕೋಟಿ ರೂಪಾಯಿಗಳನ್ನು ಕೇಂದ್ರ ಸರ್ಕಾರ ಬಿಡುಗಡೆ ಮಾಡಿದೆ. ಇದರೊಂದಿಗೆ ಸುಪ್ರೀಂ ಕೋರ್ಟ್‌ ಮೊರೆ ಹೋಗಿದ್ದ ಕರ್ನಾಟಕ ಸರ್ಕಾರಕ್ಕೆ ಕೊನೆಗೂ ಜಯ ಸಿಕ್ಕಂತಾಗಿದೆ. 18,171 ಕೋಟಿ ರೂ. ಬಿಡುಗಡೆ ಮಾಡುವಂತೆ ರಾಜ್ಯ ಸರ್ಕಾರ ಮನವಿ ಮಾಡಿತ್ತು. ಹಾಗಾಗಿ, ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಅಸಮಾಧಾನ ವ್ಯಕ್ತಪಡಿಸಿದ್ದಾರೆ.

VISTARANEWS.COM


on

Drought Relief
Koo

ಕಲಬುರಗಿ: ಕರ್ನಾಟಕ ಸರ್ಕಾರವು ಬರ ಪರಿಹಾರಕ್ಕಾಗಿ ಸುಪ್ರೀಂ ಕೋರ್ಟ್‌ (Supreme Court) ಮೊರೆ ಹೋದ ಬಳಿಕ ಕೊನೆಗೂ ಕೇಂದ್ರ ಸರ್ಕಾರ ಕರ್ನಾಟಕಕ್ಕೆ 3,454 ಕೋಟಿ ರೂ. ಬರ ಪರಿಹಾರ (Drought Relief) ನೀಡಿದೆ. ಬರ ಪರಿಹಾರ ಬಿಡುಗಡೆ ಮಾಡಿದ ಬಳಿಕ ಮುಖ್ಯಮಂತ್ರಿ ಸಿದ್ದರಾಮಯ್ಯ (CM Siddaramaiah) ಅವರು ಮೊದಲ ಪ್ರತಿಕ್ರಿಯೆ ನೀಡಿದ್ದು, “ಕೇಂದ್ರ ಸರ್ಕಾರವು ನಾವು ಕೇಳಿದ್ದಕ್ಕಿಂತ ತುಂಬ ಕಡಿಮೆ ಹಣ ಬಿಡುಗಡೆ ಮಾಡಿದೆ. ಈ ಕುರಿತು ಅಧಿಕಾರಿಗಳ ಜತೆ ಚರ್ಚಿಸಿ ಮುಂದಿನ ತೀರ್ಮಾನ ತೆಗೆದುಕೊಳ್ಳಲಾಗುವುದು” ಎಂದು ತಿಳಿಸಿದರು.

“ರಾಜ್ಯದಲ್ಲಿ 35 ಸಾವಿರ ಕೋಟಿ ರೂ. ಮೊತ್ತದ ಬೆಳೆ ನಷ್ಟವಾಗಿದೆ. 48 ಸಾವಿರ ಹೆಕ್ಟೇರ್‌ ಬೆಳೆ ನಾಶ ಆಗಿದೆ. 223 ತಾಲೂಕುಗಳು ಬರಪೀಡಿತ ಎಂಬುದಾಗಿ ಘೋಷಣೆ ಮಾಡಿದ್ದೇವೆ. ಹಾಗಾಗಿ, ನಾವು ಕೇಂದ್ರ ಸರ್ಕಾರಕ್ಕೆ 18,172 ಕೋಟಿ ರೂ. ಪರಿಹಾರ ಕೇಳಿದ್ದೆವು. ಆದರೆ, ಈಗ ಕೇಂದ್ರ ಸರ್ಕಾರವು ನಾವು ಕೇಳಿದ ನಾಲ್ಕನೇ ಒಂದು ಭಾಗದಷ್ಟು ಮಾತ್ರ ಪರಿಹಾರ ನೀಡಿದೆ. ಇದು ತುಂಬ ಕಡಿಮೆ ಆಯಿತು. ಈ ಕುರಿತು ಅಧಿಕಾರಿಗಳ ಜತೆ ಚರ್ಚಿಸಿ ಮುಂದಿನ ನಿರ್ಧಾರ ತೆಗೆದುಕೊಳ್ಳುತ್ತೇವೆ” ಎಂಬುದಾಗಿ ಕಲಬುರಗಿಯಲ್ಲಿ ನಡೆದ ಸುದ್ದಿಗೋಷ್ಠಿಯಲ್ಲಿ ಸಿದ್ದರಾಮಯ್ಯ ತಿಳಿಸಿದರು.

ಲೋಕಸಭೆ ಚುನಾವಣೆ ಕುರಿತು ಮಾತನಾಡಿದ ಅವರು, “ಕರ್ನಾಟಕದಲ್ಲಿ ನಿನ್ನೆ (ಏಪ್ರಿಲ್‌ 26) ಮೊದಲ ಹಂತದ ಮತದಾನ ಮುಕ್ತಾಯವಾಗಿದೆ. ಎಲ್ಲ ಕ್ಷೇತ್ರಗಳಲ್ಲಿ ಕಾಂಗ್ರೆಸ್‌ಗೆ ಹೆಚ್ಚಿನ ಮತದಾನವಾಗಿದೆ ಎಂಬುದಾಗಿ ವರದಿ ತಿಳಿಸಿದೆ. ಕರ್ನಾಟಕ ಸರ್ಕಾರ ಘೋಷಿಸಿದ ಐದು ಗ್ಯಾರಂಟಿಗಳು ಜನ ನಮ್ಮ ಮೇಲೆ ಹೆಚ್ಚು ವಿಶ್ವಾಸ ಇರಿಸಲು ಕಾರಣವಾಗಿದೆ. ಹಾಗಾಗಿ, ಎಲ್ಲ ಕ್ಷೇತ್ರಗಳಲ್ಲೂ ನಮಗೆ ಮುನ್ನಡೆ ಸಿಗುವುದು ನಿಶ್ಚಿತ” ಎಂದು ಹೇಳಿದರು. ನರೇಂದ್ರ ಮೋದಿ ಅಬ್ಬರದ ಭಾಷಣ, ಕಾಂಗ್ರೆಸ್‌ ವಿರುದ್ಧ ಟೀಕೆಗಳ ಕುರಿತು ಮಾತನಾಡಿದ ಅವರು, “ಪ್ರಧಾನಿಯವರಿಗೆ ಸುಳ್ಳು ಹೇಳುವುದು ರೂಢಿಯಾಗಿದೆ. ಆ ಸುಳ್ಳುಗಳನ್ನು ಜನ ಇನ್ನು ನಂಬುವುದಿಲ್ಲ” ಎಂದು ಕುಟುಕಿದರು.

ಮಲತಾಯಿ ಧೋರಣೆ ಎಂದ ಕೃಷ್ಣ ಭೈರೇಗೌಡ

ಕೇಂದ್ರ ಸರ್ಕಾರವು ಕಡಿಮೆ ಮೊತ್ತದ ಬರ ಪರಿಹಾರ ಬಿಡುಗಡೆ ಮಾಡಿದೆ ಎಂದು ಸಚಿವ ಕೃಷ್ಣ ಭೈರೇಗೌಡ ಅಸಮಾಧಾನ ವ್ಯಕ್ತಪಡಿಸಿದ್ದಾರೆ. “ಕೇಂದ್ರ ಸರ್ಕಾರ ಮಲತಾಯಿ ಧೋರಣೆ ಅನುಸರಿಸುತ್ತಿದೆ. ರಾಜ್ಯದಲ್ಲಿ 200ಕ್ಕೂ ಅಧಿಕ ತಾಲೂಕುಗಳನ್ನು ಬರಪೀಡಿತ ಎಂದು ಘೋಷಣೆ ಮಾಡಲಾಗಿದೆ. ಇಷ್ಟಿದ್ದರೂ ಕೇವಲ 3,454 ಕೋಟಿ ರೂ. ಬರ ಪರಿಹಾರ ಬಿಡುಗಡೆ ಮಾಡಿದೆ. ಈ ದುಡ್ಡು ಯಾವುದಕ್ಕೂ ಸಾಕಾಗುವುದಿಲ್ಲ” ಎಂದು ಅಸಮಾಧಾನ ವ್ಯಕ್ತಪಡಿಸಿದ್ದಾರೆ.

ಮೋದಿಗೆ ಧನ್ಯವಾದ ಎಂದ ಕರ್ನಾಟಕ ಬಿಜೆಪಿ

ಕರ್ನಾಟಕಕ್ಕೆ ಬರ ಪರಿಹಾರ ಬಿಡುಗಡೆ ಮಾಡಿದ ಹಿನ್ನೆಲೆಯಲ್ಲಿ ಕರ್ನಾಟಕ ಬಿಜೆಪಿಯು ಪ್ರಧಾನಿ ನರೇಂದ್ರ ಮೋದಿ ಅವರಿಗೆ ಧನ್ಯವಾದ ತಿಳಿಸಿದೆ. ಎಕ್ಸ್‌ ಸಾಮಾಜಿಕ ಜಾಲತಾಣದಲ್ಲಿ ಪೋಸ್ಟ್‌ ಮಾಡಿದ ಬಿಜೆಪಿ, “ಬರ ಪರಿಹಾರ ಮಾಡಿದ ಹಿನ್ನೆಲೆಯಲ್ಲಿ ನಾಡಿನ ಸಮಸ್ತ ಕನ್ನಡಿಗರ ಪರವಾಗಿ ಪ್ರಧಾನಿ ನರೇಂದ್ರ ಮೋದಿ ಅವರಿಗೆ ತುಂಬು ಹೃದಯದ ಧನ್ಯವಾದಗಳು” ಎಂದಿದೆ.

ಕರ್ನಾಟಕದಲ್ಲಿ ಕಂಡು ಕೇಳರಿಯದಂತಹ ಬರ ಉಂಟಾದರೂ, ರೈತರಿಗೆ ಬಿಡಿಗಾಸು ಮಧ್ಯಂತರ ಪರಿಹಾರ ನೀಡದೆ ರಾಜ್ಯ ಕಾಂಗ್ರೆಸ್‌ ಸರ್ಕಾರವು ಸಂಪೂರ್ಣ ಓಲೈಕೆ ರಾಜಕಾರಣದಲ್ಲಿ ನಿರತವಾಗಿತ್ತು. ಆದರೆ, ಚುನಾವಣಾ ನೀತಿ ಸಂಹಿತೆ ಜಾರಿಯಲ್ಲಿರುವ ಸಂದರ್ಭದಲ್ಲಿಯೂ ಕನ್ನಡಿಗರ ಸಂಕಷ್ಟಕ್ಕೆ ನೆರವಾಗಿರುವ ನರೇಂದ್ರ ಮೋದಿಯವರು ಕರ್ನಾಟಕಕ್ಕೆ 3,454 ಕೋಟಿ ರೂ. ಬರ ಪರಿಹಾರ ನೀಡುವ ಮೂಲಕ ಸಮಸ್ತ ಕನ್ನಡಿಗರ ಹಿತ ಕಾಯುವ ಕೆಲಸ ಮಾಡಿದ್ದಾರೆ” ಎಂದಿದೆ.

ಇದನ್ನೂ ಓದಿ: Drought Relief: ಕರ್ನಾಟಕಕ್ಕೆ 3,454 ಕೋಟಿ ರೂ. ಬರ ಪರಿಹಾರ ಬಿಡುಗಡೆ ಮಾಡಿದ ಕೇಂದ್ರ ಸರ್ಕಾರ

Continue Reading
Advertisement
Lok Sabha
ಕರ್ನಾಟಕ6 mins ago

ಮೊದಲ ಹಂತದ ಮತದಾನ ಬೆನ್ನಲ್ಲೇ ಕಾಂಗ್ರೆಸ್‌, ಬಿಜೆಪಿ ಅಲರ್ಟ್;‌ ‘ಉತ್ತರ’ದತ್ತ ಚಿತ್ತ, 13 ಸಚಿವರಿಗೆ ಟಾಸ್ಕ್!

assault case in anekla
ಬೆಂಗಳೂರು ಗ್ರಾಮಾಂತರ35 mins ago

Assault Case : ಕುಡಿದ ನಶೆಯಲ್ಲಿ ಸ್ನೇಹಿತನಿಗೆ ಬೆಂಕಿ ಹಚ್ಚಿದ ಮಿತ್ರ ದ್ರೋಹಿಗಳು ಅರೆಸ್ಟ್‌

shilpa shetty visits shibaruru sri kodamanittaya
ಸಿನಿಮಾ36 mins ago

Shilpa Shetty: ಪೂಜಾ ಕಾರ್ಯಕ್ಕೆ ಕುಟುಂಬ ಸಮೇತರಾಗಿ ಮಂಗಳೂರಿಗೆ ಬಂದ ಶಿಲ್ಪಾ ಶೆಟ್ಟಿ

mamata banerjee helicopter
ಪ್ರಮುಖ ಸುದ್ದಿ40 mins ago

Mamata Banerjee: ಹೆಲಿಕಾಪ್ಟರ್‌ ಏರುವಾಗ ಬಿದ್ದ ಮಮತಾ ಬ್ಯಾನರ್ಜಿ, ಗಾಯ

ದೇಶ57 mins ago

Self harming: ಮದುವೆಯಲ್ಲಿ ಪತ್ನಿ ಡಾನ್ಸ್‌ ಮಾಡಿದಳೆಂದು ಬೇಸರಗೊಂಡ ಪತಿ ಆತ್ಮಹತ್ಯೆ

mobile blast woman death
ಕ್ರೈಂ1 hour ago

Mobile Blast: ಬೈಕ್‌ ಚಲಾಯಿಸುತ್ತಿದ್ದಾಗ ಮೊಬೈಲ್‌ ಸ್ಫೋಟ, ಡಿವೈಡರ್‌ಗೆ ಗುದ್ದಿ ಮಹಿಳೆ ಸಾವು

Randeep Surjewala
ಕರ್ನಾಟಕ2 hours ago

Randeep Surjewala: ಕನ್ನಡಿಗರ ತೆರಿಗೆ ಹಣದಲ್ಲಿ ಸುರ್ಜೇವಾಲಾ ಟ್ರಿಪ್;‌ ಕೆರಳಿ ಕೆಂಡವಾದ ಬಿಜೆಪಿ!

Murder case in dharwad
ಕ್ರೈಂ2 hours ago

Murder case: ಹೆಂಡ್ತಿ ಮೇಲೆ ಸಂಶಯ; ಕುಡಿದು ಬಂದು ಕೊಡಲಿಯಿಂದ ಕೊಚ್ಚಿ ಕೊಂದ

miss universe Buenos Aires
ವಿದೇಶ2 hours ago

Miss Universe Buenos Aires: ಈಕೆ ಬ್ಯೂನಸ್‌ ಐರಿಸ್‌ ವಿಶ್ವ ಸುಂದರಿ; ಇವಳ ವಯಸ್ಸು ನೀವೇ ಊಹಿಸಿ!

Gurucharan Singh Taarak Mehta Ka Ooltah Chashmah actor missing
ಕಿರುತೆರೆ2 hours ago

Gurucharan Singh: ‘ತಾರಕ್ ಮೆಹ್ತಾ ಕಾ ಉಲ್ಟಾ ಚಶ್ಮಾ’ ಖ್ಯಾತಿಯ ನಟ ನಿಗೂಢ ನಾಪತ್ತೆ

Sharmitha Gowda in bikini
ಕಿರುತೆರೆ7 months ago

Geetha Serial Kannada: ನಿದ್ದೆ ಕದ್ದ ಚೋರಿ! ನಟಿ `ಭಾನುಮತಿ’ ಹಾಟ್‌ ಪೋಟೊಗಳಿಗೆ ಫ್ಯಾನ್ಸ್ ಫುಲ್ ಫಿದಾ

Kannada Serials
ಕಿರುತೆರೆ7 months ago

Kannada Serials TRP: 2ನೇ ಸ್ಥಾನದಲ್ಲಿ 2 ಧಾರಾವಾಹಿಗಳು; ಟಿಆರ್‌ಪಿ ರೇಸ್‌ನಲ್ಲಿಲ್ಲ ಭಾಗ್ಯಲಕ್ಷ್ಮೀ!

Bigg Boss- Saregamapa 20 average TRP
ಕಿರುತೆರೆ6 months ago

Kannada Serials TRP: ಏಳನೇ ಸ್ಥಾನಕ್ಕೆ ʻಅಮೃತಧಾರೆʼ ಕುಸಿತ; ಬಿಗ್‌ ಬಾಸ್‌-ಸರಿಗಮಪ ಟಿಆರ್‌ಪಿ ಎಷ್ಟು?

galipata neetu
ಕಿರುತೆರೆ5 months ago

Kanyadana Serial: ಕಿರುತೆರೆಗೆ ಮತ್ತೆ ಎಂಟ್ರಿ ಕೊಟ್ಟ ʻಗಾಳಿಪಟʼ ಖ್ಯಾತಿಯ ʻನೀತುʼ!

Kannada Serials
ಕಿರುತೆರೆ7 months ago

Kannada Serials TRP: ನಾಲ್ಕನೇ ಸ್ಥಾನಕ್ಕೆ ಕುಸಿತ ಕಂಡ ʻಸೀತಾ ರಾಮʼ; ಟಿಆರ್‌ಪಿ ರೇಸ್‌ಗೆ ʻಭಾಗ್ಯಲಕ್ಷ್ಮಿʼ ಬ್ಯಾಕ್‌!

Kannada Serials
ಕಿರುತೆರೆ7 months ago

Kannada Serials TRP: ಟಿಆರ್‌ಪಿಯಲ್ಲಿ ʻಭಾಗ್ಯಲಕ್ಷ್ಮೀʼ ಹವಾ; ʻಪುಟ್ಟಕ್ಕನ ಮಕ್ಕಳುʼ ಧಾರಾವಾಹಿಗೆ ಸಂಕಷ್ಟ!

Bigg Boss' dominates TRP; Sita Rama fell to the sixth position
ಕಿರುತೆರೆ6 months ago

Kannada Serials TRP: ಟಿಆರ್‌ಪಿಯಲ್ಲಿ ʻಬಿಗ್ ಬಾಸ್ʼದೇ ಮೇಲುಗೈ; 6ನೇ ಸ್ಥಾನಕ್ಕೆ ಕುಸಿದ ʻಸೀತಾ ರಾಮʼ

geetha serial Dhanush gowda engagement
ಕಿರುತೆರೆ4 months ago

Dhanush Gowda: ಗೀತಾ ಧಾರಾವಾಹಿ ನಟನ ನಿಶ್ಚಿತಾರ್ಥ; ಭವ್ಯಾಳ ಕಮೆಂಟ್‌ ಬಾಕ್ಸ್‌ ಆಫ್‌!

varun
ಕಿರುತೆರೆ5 months ago

Brindavana Serial: ʼಬೃಂದಾವನʼ ಧಾರಾವಾಹಿಯಲ್ಲಿ ದೊಡ್ಡ ಟ್ವಿಸ್ಟ್‌; ಪ್ರಮುಖ ಪಾತ್ರಧಾರಿಯೇ ಬದಲು

Kannada Serials
ಕಿರುತೆರೆ8 months ago

Kannada Serials TRP: ಟಿಆರ್‌ಪಿಯಲ್ಲಿ ಏರಿಕೆ ಕಂಡ ʻಅಮೃತಧಾರೆʼ; ʻಗಟ್ಟಿಮೇಳʼಕ್ಕೆ ನಾಲ್ಕನೇ ಸ್ಥಾನ!

road Accident in kolar evm
ಕೋಲಾರ4 hours ago

Road Accident : ಇವಿಎಂ ಸಾಗಿಸುವಾಗ ವಾಹನದ ಟೈರ್‌ ಸ್ಫೋಟ; ರೋಡ್‌ನಲ್ಲೇ ರಿಪೇರಿ, ಮೊಕ್ಕಾಂ ಹೂಡಿದ ಪೊಲೀಸರು

Dina Bhavishya
ಭವಿಷ್ಯ11 hours ago

Dina Bhavishya : ಈ ದಿನ ನಿಮ್ಮ ಪ್ರೀತಿಯ ಕನಸು ನನಸಾಗುವ ಸುದಿನ

Lok Sabha Election 2024 congress booth agent allegation for Fake voting in Hassan Lok Sabha constituency
ಹಾಸನ1 day ago

Lok Sabha Election 2024: ಹಾಸನ ಲೋಕಸಭಾ ಕ್ಷೇತ್ರದಲ್ಲಿ ನಕಲಿ ಮತದಾನ! ಏನಿದು ಕಾಂಗ್ರೆಸ್‌ ಬೂತ್‌ ಏಜೆಂಟ್‌ ಆರೋಪ?

Lok Sabha Election 2024 Woman suffers cardiac arrest at polling booth Doctor who came to cast his vote saved life
Lok Sabha Election 20241 day ago

Lok Sabha Election 2024: ಮತಗಟ್ಟೆಯಲ್ಲಿ ಮಹಿಳೆಗೆ ಹೃದಯ ಸ್ತಂಭನ; ಮತ ಹಾಕಲು ಬಂದಿದ್ದ ವೈದ್ಯನಿಂದ ಪ್ರಾಣ ರಕ್ಷಣೆ

Lok Sabha Election 2024 Youth Congress protest
Lok Sabha Election 20241 day ago

Lok Sabha Election 2024 : ಮತಗಟ್ಟೆ ಬಳಿ ಚೆಂಬು, ಗ್ಯಾಸ್ ಸಿಲಿಂಡರ್ ಪ್ರದರ್ಶಿಸಿದ ಯೂತ್‌ ಕಾಂಗ್ರೆಸ್‌

Dina bhavishya
ಭವಿಷ್ಯ1 day ago

Dina Bhavishya : ಅಪರಿಚಿತರೊಂದಿಗೆ ಅತಿಯಾದ ಸಲುಗೆ ಅಪಾಯ ತಂದಿತು ಎಚ್ಚರ

Neha Murder Case in hubblli
ಹುಬ್ಬಳ್ಳಿ2 days ago

Neha Murder Case : ಮನೆ ಸುತ್ತಮುತ್ತ ಅನಾಮಧೇಯ ವ್ಯಕ್ತಿಗಳ ಓಡಾಟ; ಸಂತಾಪ ನೆಪದಲ್ಲಿ ನೇಹಾ ಬೆಡ್‌ರೂಂ ಚಿತ್ರೀಕರಣ!

Neha Murder Case
ಹುಬ್ಬಳ್ಳಿ2 days ago

Neha Murder case : ನೇಹಾ ಹತ್ಯೆ; ಕಾರು ಚಾಲಕ, ಅಕೌಂಟೆಂಟ್‌ ಸಿಐಡಿ ವಶಕ್ಕೆ! ಅಜ್ಞಾತ ಸ್ಥಳದಲ್ಲಿ ವಿಚಾರಣೆ

Neha Murder case CID Officer
ಹುಬ್ಬಳ್ಳಿ2 days ago

Neha Murder Case : ರಹಸ್ಯ ಸ್ಥಳದಲ್ಲಿ ಫಯಾಜ್‌; ನೇಹಾ ಪೋಷಕರಿಗೆ ಸಿಐಡಿ ತಂಡದಿಂದ 1 ಗಂಟೆ ಸುದೀರ್ಘ ವಿಚಾರಣೆ

Lok sabha election 2024
Lok Sabha Election 20242 days ago

Lok Sabha Election 2024 : ಕರ್ನಾಟಕದಲ್ಲಿ ಮೊದಲ ಹಂತದ ಮತದಾನ; ಪ್ರವಾಸಿ ತಾಣಗಳ ಪ್ರವೇಶಕ್ಕೆ ಪ್ರವಾಸಿಗರಿಗೆ ನಿಷೇಧ

ಟ್ರೆಂಡಿಂಗ್‌