assault case Drunk man assaults police constableAssault Case: ಎಣ್ಣೆ ಮತ್ತಲ್ಲಿ ಪೊಲೀಸ್ ಕಾನ್ಸ್‌ಟೇಬಲ್‌ಗೆ ಕಪಾಳಮೋಕ್ಷ ಮಾಡಿದ ಪುಂಡರು - Vistara News

ಕರ್ನಾಟಕ

Assault Case: ಎಣ್ಣೆ ಮತ್ತಲ್ಲಿ ಪೊಲೀಸ್ ಕಾನ್ಸ್‌ಟೇಬಲ್‌ಗೆ ಕಪಾಳಮೋಕ್ಷ ಮಾಡಿದ ಪುಂಡರು

Drunk persons: ಕಂಠಪೂರ್ತಿ ಕುಡಿದು ಕಿರುಚಾಡುತ್ತಿದ್ದವರನ್ನು ಪ್ರಶ್ನಿಸಲು ಹೋದ ಪೊಲೀಸರ (Assault Case) ಮೇಲೆಯೇ ಪುಂಡರು ಹಲ್ಲೆ ಮಾಡಿದ್ದಾರೆ. ಅವಾಚ್ಯ ಶಬ್ಧಗಳಿಂದ ನಿಂಧಿಸಿ ಮನಬಂದಂತೆ ಥಳಿಸಿದವರನ್ನು ಬಂಧಿಸಲಾಗಿದೆ.

VISTARANEWS.COM


on

Accused
ಬಂಧಿತ ಆರೋಪಿಗಳು
ಮಹತ್ವದ, ಕುತೂಹಲಕರ ಸುದ್ದಿಗಾಗಿ ಫಾಲೊ ಮಾಡಿ

ಕಲಬುರಗಿ: ಇಲ್ಲಿನ ದೇವಾ ನಗರದ ಸಾಯಿ ಮಂದಿರದ ಬಳಿಯಿರುವ ಯರಗೋಳ ಕಲ್ಯಾಣ ಮಂಟಪ ಬಳಿ ಎಣ್ಣೆ ಮತ್ತಲ್ಲಿ ಪೊಲೀಸ್ ಕಾನ್ಸ್‌ಟೇಬಲ್ ಮೇಲೆ ಹಲ್ಲೆ (Assault case) ಮಾಡಿದ್ದಾರೆ. ಸ್ಟೇಷನ್ ಬಜಾರ್ ಠಾಣೆಯ (Station Bazaar Police Station) ಪೊಲೀಸ್ ಕಾನ್ಸ್‌ಟೇಬಲ್ (Constable) ಶಾಂತಲಿಂಗ ಹಲ್ಲೆಗೊಳಗಾದವರು.

ಮಲ್ಲಿಕಾರ್ಜುನ ಮತ್ತು ವಿಜಯ ಎಂಬುವವರು ಕಂಠಪೂರ್ತಿ ಕುಡಿದು ಕಟ್ಟಡ ಒಂದರಲ್ಲಿ ಕುಳಿತು ಕಿರುಚಾಡುತ್ತಿದ್ದರು. ಕಿರುಚಾಟ ಕೇಳಿ ರಾತ್ರಿ ಗಸ್ತಿನಲ್ಲಿದ್ದ ಪಿಸಿ ಶಾಂತಲಿಂಗ ಮತ್ತು ದೇವೇಂದ್ರ ಎಂಬುವವರು ಸ್ಥಳಕ್ಕೆ ತೆರಳಿ ವಿಚಾರಿಸಿದ್ದಾರೆ.

ಈ ವೇಳೆ ಪಿಸಿ ಶಾಂತಲಿಂಗ ಅವರ ಶರ್ಟ್ ಹಿಡಿದು ಕಪಾಳಕ್ಕೆ ಹೊಡೆದು ಹಲ್ಲೆ ಮಾಡಿದ್ದಾರೆ. ಪಾನಮತ್ತರಾಗಿದ್ದ ಮಲ್ಲಿಕಾರ್ಜುನ ಮತ್ತು ವಿಜಯ ಪೊಲೀಸರ ಬಗ್ಗೆ ಅವಾಚ್ಯ ಶಬ್ದಗಳಿಂದ ನಿಂದಿಸಿ ಹಲ್ಲೆ ಮಾಡಿದ್ದಾರೆ. ಸದ್ಯ ಆರೋಪಿಗಳಿಬ್ಬರನ್ನು ಬಂಧಿಸಿದ್ದು, ಸ್ಟೇಷನ್ ಬಜಾರ್ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಮುತ್ತಪ್ಪ ರೈ ಮಗ ಮತ್ತು ಉದ್ಯಮಿ ನಾಯ್ಡು ನಡುವೆ ಮತ್ತೆ ಜಟಾಪಟಿ

ಬೆಂಗಳೂರಲ್ಲಿ ಈಗಾಗಲೇ ಪೊಲೀಸ್‌ ಠಾಣೆಯಲ್ಲಿ ಪರಸ್ಪರ ಪ್ರಕರಣ ದಾಖಲಾಗಿರುವ ಬೆಂಗಳೂರಿನ ಭೂಗತ ಜಗತ್ತಿನ (Bangalore underworld) ಇಬ್ಬರು ರೌಡಿಶೀಟರ್‌ಗಳ ನಡುವೆ ಮತ್ತೊಮ್ಮೆ ಜಟಾಪಟಿ ನಡೆದಿದೆ. ಮಾಜಿ ಡಾನ್‌ ಮುತ್ತಪ್ಪ ರೈ ಮಗ ರಿಕ್ಕಿ ರೈ ಹಾಗೂ ಉದ್ಯಮಿ ಶ್ರೀನಿವಾಸ್ ನಾಯ್ಡು ಮತ್ತೊಮ್ಮೆ ಕೈ ಮಿಲಾಯಿಸಿಕೊಂಡಿದ್ದಾರೆ.

ಲ್ಯಾವೆಲ್ಲೆ ರೋಡ್ ಖಾಜೆ ಬಾರ್ ಅಂಡ್ ಕಿಚನ್ ಹೋಟೆಲ್‌ನಲ್ಲಿ ಘಟನೆ ನಡೆದಿದೆ. ಮಧ್ಯರಾತ್ರಿ 1 ಗಂಟೆಗೆ ಮುತ್ತಪ್ಪ ರೈ ಪುತ್ರ ರಿಕ್ಕಿ ರೈ ಹಾಗೂ ಉದ್ಯಮಿ ಶ್ರೀನಿವಾಸ್ ನಾಯ್ಡು ಮುಖಾಮುಖಿಯಾಗಿದ್ದು, ಇಬ್ಬರ ನಡುವೆ ಜಗಳ ಶುರುವಾಗಿದೆ. ಮದ್ಯದ ಅಮಲಿನಲ್ಲಿ ಇಬ್ಬರೂ ಕೈ ಕೈ ಮಿಲಾಯಿಸಿಕೊಂಡಿದ್ದಾರೆ. ಘಟನೆಯಲ್ಲಿ ರಿಕ್ಕಿ ರೈ ಹಣೆಗೆ ಗಾಯವಾಗಿದ್ದು, ಮಲ್ಯ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾನೆ. ಘಟನೆ ಬಗ್ಗೆ ರಿಕ್ಕಿ ರೈ ಕಬ್ಬನ್ ಪಾರ್ಕ್ ಪೊಲೀಸ್ ಠಾಣೆಗೆ ದೂರು ನೀಡಿದ್ದಾನೆ. ಗಲಾಟೆ ಸಂಬಂಧಿಸಿದಂತೆ ಯಾವುದೇ ಪ್ರಕರಣ ದಾಖಲಾಗಿಲ್ಲ.

ಇದನ್ನೂ ಓದಿ: Karnataka Cabinet expansion: ಸಿದ್ದರಾಮಯ್ಯ ಸಂಪುಟದಲ್ಲಿ ಸಿಗದ ಸ್ಥಾನ; ಅಸಮಾಧಾನ ಸ್ಫೋಟ

ಈ ಹಿಂದೆ ಉದ್ಯಮಿ ಶ್ರೀನಿವಾಸ ನಾಯ್ಡುಗೆ ಸೇರಿದ ಒಂದು ಕೋಟಿ ರೂಪಾಯಿ ಬೆಲೆಯ ರೇಂಜ್‌ ರೋವರ್‌ ಕಾರನ್ನು ರಿಕ್ಕಿ ರೈ ಸಹಚರರು ಸುಟ್ಟುಹಾಕಿದ್ದಾರೆ ಎಂದು ನಾಯ್ಡು ದೂರು ನೀಡಿದ್ದರು. ಇದಕ್ಕೂ ಮೊದಲು ಒಡನಾಡಿಗಳಾಗಿದ್ದ ರಿಕ್ಕಿ ರೈ ಹಾಗೂ ಶ್ರೀನಿವಾಸ ನಾಯ್ಡು ನಡುವೆ ಬಳಿಕ ವೈಮನಸ್ಯ ಬೆಳೆದಿತ್ತು.

ರಾಜ್ಯದ ಇನ್ನಷ್ಟು ಸುದ್ದಿಗಾಗಿ ಈ ಲಿಂಕ್‌ ಕ್ಲಿಕ್‌ ಮಾಡಿ

ಕ್ಷಣ ಕ್ಷಣದ ಮಾಹಿತಿಗಾಗಿ Vistara News FaceBook ಪೇಜ್ ಫಾಲೋ ಮಾಡಿ
Continue Reading
Click to comment

Leave a Reply

Your email address will not be published. Required fields are marked *

Latest

ಬೆಳಗಾವಿಯಲ್ಲಿ ನಿರ್ಮಾಣವಾಗಲಿದೆ ಭವ್ಯ ತಿರುಪತಿ ತಿಮ್ಮಪ್ಪನ ದೇಗುಲ: 100 ಕೋಟಿ ವೆಚ್ಚ, 7 ಎಕರೆ ಜಾಗ ಮಂಜೂರು

VISTARANEWS.COM


on

ಬೆಳಗಾವಿ: ಉತ್ತರ ಕರ್ನಾಟಕದ ಭಕ್ತರ ಪಾಲಿಗೆ ತಿರುಮಲ ತಿರುಪತಿ ದೇವಸ್ಥಾನ (TTD) ಮಂಡಳಿಯು ಸಿಹಿ ಸುದ್ದಿಯೊಂದನ್ನು ನೀಡಿದೆ. ತಿರುಪತಿಯ ಭವ್ಯ ವೆಂಕಟೇಶ್ವರ ದೇವಾಲಯದ ಮಾದರಿಯಲ್ಲೇ ಬೆಳಗಾವಿಯಲ್ಲಿಯೂ ಸುಮಾರು 100 ಕೋಟಿ ರೂಪಾಯಿ ವೆಚ್ಚದಲ್ಲಿ ಶ್ರೀನಿವಾಸನ ಸನ್ನಿಧಿ ತಲೆಯೆತ್ತಲಿದೆ. ಬೆಳಗಾವಿ ತಾಲೂಕಿನ ಕೋಳಿಕೊಪ್ಪ ಹೊರವಲಯದ ಸುಮಾರು 7 ಎಕರೆ ಪ್ರದೇಶದಲ್ಲಿ ಈ ಯೋಜನೆ ಸಾಕಾರಗೊಳ್ಳಲಿದ್ದು, ಇದಕ್ಕಾಗಿ ಬೆಳಗಾವಿ ರೆಡ್ಡಿ ಸಂಘವು ಭೂಮಿಯನ್ನು ಖರೀದಿಸಿ ಈಗಾಗಲೇ ಟಿಟಿಡಿ ಮಂಡಳಿಗೆ ಅಧಿಕೃತವಾಗಿ ಹಸ್ತಾಂತರಿಸಿದೆ. ಈ ಮೂಲಕ ಕುಂದಾನಗರಿಯಲ್ಲಿ ತಿಮ್ಮಪ್ಪನ ದರ್ಶನಕ್ಕೆ ಮೊದಲ ಭದ್ರ ಬುನಾದಿ ಬಿದ್ದಿದೆ.

ಈ ದೇವಾಲಯವು ಕೇವಲ ಧಾರ್ಮಿಕ ಕೇಂದ್ರವಾಗಿರದೆ, ವಾಸ್ತುಶಿಲ್ಪ, ಲಡ್ಡು ವಿತರಣೆ ಮತ್ತು ಭಕ್ತರ ವಾಸ್ತವ್ಯದ ಸೌಲಭ್ಯ ಸೇರಿದಂತೆ ಪ್ರತಿಯೊಂದೂ ಅಂಶದಲ್ಲೂ ಮೂಲ ತಿರುಪತಿ ಕ್ಷೇತ್ರವನ್ನೇ ಹೋಲುವಂತೆ ನಿರ್ಮಾಣವಾಗಲಿದೆ. ನೂರು ಕೋಟಿ ರೂಪಾಯಿ ವೆಚ್ಚದ ಈ ಯೋಜನೆಯಲ್ಲಿ ಶೇ. 10ರಷ್ಟು ಹಣವನ್ನು ಮಾತ್ರ ದಾನಿಗಳಿಂದ ಸಂಗ್ರಹಿಸಿ, ಉಳಿದ ವೆಚ್ಚವನ್ನು ಟಿಟಿಡಿ ಭರಿಸಲಿದೆ. ಮುಂದಿನ ಎರಡು ವರ್ಷಗಳಲ್ಲಿ ಕಾಮಗಾರಿಯನ್ನು ಪೂರ್ಣಗೊಳಿಸುವ ಗುರಿ ಹೊಂದಲಾಗಿದ್ದು, ಇದಕ್ಕಾಗಿ ಟಿಟಿಡಿ ಪ್ರತ್ಯೇಕ ಟ್ರಸ್ಟ್ ರಚಿಸಿ ಸ್ಥಳೀಯರನ್ನು ಒಳಗೊಳ್ಳಲಿದೆ. ಈ ದೇವಾಲಯದ ನಿರ್ಮಾಣದಿಂದ ಬೆಳಗಾವಿ ಜಿಲ್ಲೆಯಷ್ಟೇ ಅಲ್ಲದೆ, ನೆರೆಯ ಗೋವಾ ಮತ್ತು ಮಹಾರಾಷ್ಟ್ರದ ಭಕ್ತರಿಗೂ ತಿಮ್ಮಪ್ಪನ ದರ್ಶನ ಪಡೆಯಲು ಸುಲಭವಾಗಲಿದೆ.

ನೂತನ ದೇವಾಲಯಗಳ ನಿರ್ಮಾಣಕ್ಕಾಗಿ ಟಿಟಿಡಿ ಮೀಸಲಿಟ್ಟಿರುವ ಒಂಬತ್ತು ಸಾವಿರ ಕೋಟಿ ರೂಪಾಯಿ ನಿಧಿಯಲ್ಲಿ ಬೆಳಗಾವಿ ಯೋಜನೆಯೂ ಸೇರಿದೆ. ದೇಶದ ಆರು ಪ್ರಮುಖ ಸ್ಥಳಗಳಲ್ಲಿ ವೆಂಕಟೇಶ್ವರ ದೇವಾಲಯ ನಿರ್ಮಿಸಲು ಉದ್ದೇಶಿಸಿರುವ ಟಿಟಿಡಿ, ಬೆಳಗಾವಿಯಲ್ಲಿ ಶೀಘ್ರವೇ ಭೂಮಿಪೂಜೆ ನೆರವೇರಿಸುವುದಾಗಿ ತಿಳಿಸಿದೆ. ರೆಡ್ಡಿ ಸಂಘದ ಈ ಉದಾರ ಕಾರ್ಯಕ್ಕೆ ಟಿಟಿಡಿ ಮಂಡಳಿ ಪ್ರಶಂಸೆ ವ್ಯಕ್ತಪಡಿಸಿದ್ದು, ಈ ಯೋಜನೆಯಿಂದ ಬೆಳಗಾವಿ ನಗರವು ಧಾರ್ಮಿಕ ಭೂಪಟದಲ್ಲಿಯೂ ಹೊಸ ಗುರುತು ಪಡೆಯಲಿದೆ. ಶೈಕ್ಷಣಿಕ ಮತ್ತು ಸಾಮಾಜಿಕವಾಗಿ ಬೆಳೆಯುತ್ತಿರುವ ಬೆಳಗಾವಿಗೆ ಈ ವೆಂಕಟರಮಣನ ಸನ್ನಿಧಿ ಮತ್ತಷ್ಟು ಮೆರುಗು ನೀಡಲಿದೆ.

Continue Reading

Latest

ಮಾರುಕಟ್ಟೆಯಲ್ಲಿ ನಿಂಬೆಹಣ್ಣಿಗೆ ಹೆಚ್ಚಾಯ್ತು ಡಿಮ್ಯಾಂಡ್‌! ಪೂರೈಕೆ ಕಟ್, ದರ ಡಬಲ್ – ಕಂಗಾಲಾದ ಗ್ರಾಹಕ

VISTARANEWS.COM


on

ಬೇಸಿಗೆಯ ತೀವ್ರ ಶಾಖ ಮತ್ತು ಬಿಸಿಗಾಳಿಯ ನಡುವೆ ದೇಹವನ್ನು ತಂಪು ಮಾಡಿಕೊಳ್ಳಲು ಬಯಸುವ ಜನರಿಗೆ ನಿಂಬೆಹಣ್ಣಿನ ಬೆಲೆ ಏರಿಕೆ ದೊಡ್ಡ ಹೊಡೆತ ನೀಡಿದೆ. ರಾಜ್ಯದ ಚಿಲ್ಲರೆ ಮಾರುಕಟ್ಟೆಗಳಲ್ಲಿ ಪ್ರತಿ ಕೆಜಿ ನಿಂಬೆಹಣ್ಣಿನ ಬೆಲೆ ಬರೋಬ್ಬರಿ ₹250ರ ಗಡಿಯನ್ನು ದಾಟಿದ್ದು, ಗ್ರಾಹಕರು ಹಾಗೂ ಸಣ್ಣ ವ್ಯಾಪಾರಿಗಳು ಕಂಗಾಲಾಗಿದ್ದಾರೆ. ನೆರೆಯ ರಾಜ್ಯಗಳಾದ ಕೇರಳ, ತಮಿಳುನಾಡು ಮತ್ತು ಆಂಧ್ರಪ್ರದೇಶಗಳಿಂದ ಪೂರೈಕೆಯಾಗುತ್ತಿದ್ದ ನಿಂಬೆಹಣ್ಣಿನ ಪ್ರಮಾಣದಲ್ಲಿ ಗಣನೀಯ ಕುಸಿತ ಕಂಡಿರುವುದು ಈ ಬೆಲೆ ಏರಿಕೆಗೆ ಪ್ರಮುಖ ಕಾರಣವಾಗಿದೆ.

ಕೇವಲ ಒಂದು ತಿಂಗಳ ಹಿಂದೆ ಸಗಟು ಮಾರುಕಟ್ಟೆಯಲ್ಲಿ ₹70 ರಿಂದ ₹100ರ ಆಸುಪಾಸಿನಲ್ಲಿದ್ದ ನಿಂಬೆಹಣ್ಣಿನ ದರ, ಈಗ ಗಾತ್ರಕ್ಕೆ ಅನುಗುಣವಾಗಿ ₹120 ರಿಂದ ₹220ರವರೆಗೆ ಜಿಗಿದಿದೆ. ದಕ್ಷಿಣ ಭಾರತದಾದ್ಯಂತ ಬೀಸುತ್ತಿರುವ ತೀವ್ರ ಬಿಸಿಗಾಳಿಯಿಂದಾಗಿ ನಿಂಬೆ ಇಳುವರಿ ಕುಂಠಿತಗೊಂಡಿದ್ದು, ಮಾರುಕಟ್ಟೆಗೆ ಬರುತ್ತಿರುವ ಲೋಡ್‌ಗಳ ಸಂಖ್ಯೆ ಕಡಿಮೆಯಾಗಿದೆ. ಇದೇ ಸಮಯದಲ್ಲಿ ಬೇಸಿಗೆಯ ದಾಹ ಹಾಗೂ ಸಾಲು ಸಾಲು ಮದುವೆ ಸಮಾರಂಭಗಳಿರುವುದರಿಂದ ನಿಂಬೆಹಣ್ಣಿಗೆ ಬೇಡಿಕೆ ಹೆಚ್ಚಾಗಿದ್ದು, ಪೂರೈಕೆ ಮತ್ತು ಬೇಡಿಕೆಯ ನಡುವಿನ ಈ ಅಂತರವು ಬೆಲೆಯನ್ನು ಅಭೂತಪೂರ್ವ ಮಟ್ಟಕ್ಕೆ ಕೊಂಡೊಯ್ದಿದೆ.

ಈ ಬೆಲೆ ಏರಿಕೆಯ ಬಿಸಿ ರಸ್ತೆ ಬದಿಯ ಜ್ಯೂಸ್ ಸೆಂಟರ್‌ಗಳ ಮೇಲೂ ಬಿದ್ದಿದೆ. ಈ ಹಿಂದೆ ₹15ಕ್ಕೆ ಸಿಗುತ್ತಿದ್ದ ಒಂದು ಲೋಟ ನಿಂಬೆ ರಸದ ಬೆಲೆ ಈಗ ₹25ಕ್ಕೆ ಏರಿಕೆಯಾಗಿದ್ದರೆ, ಸೋಡಾ ಸರ್ಬಾತ್ ದರ ₹30ರ ಗಡಿ ತಲುಪಿದೆ. ಆರೋಗ್ಯ ಅಧಿಕಾರಿಗಳು ನಿರ್ಜಲೀಕರಣ ತಡೆಯಲು ನಿಂಬೆ ನೀರನ್ನು ಶಿಫಾರಸು ಮಾಡುತ್ತಿದ್ದಾರಾದರೂ, ಜನಸಾಮಾನ್ಯರಿಗೆ ಈಗ ಇದು ಪ್ಯಾಕ್ ಮಾಡಿದ ಪಾನೀಯಗಳಿಗಿಂತಲೂ ದುಬಾರಿಯಾಗಿ ಪರಿಣಮಿಸಿದೆ. ಹವಾಮಾನ ಪರಿಸ್ಥಿತಿ ಸುಧಾರಿಸಿ ಉತ್ಪಾದನೆ ಹೆಚ್ಚಾಗುವವರೆಗೂ ಗ್ರಾಹಕರು ಈ ಬೆಲೆ ಏರಿಕೆಯ ಹೊರೆಯನ್ನು ಅನುಭವಿಸುವುದು ಅನಿವಾರ್ಯವಾಗಿದೆ.

Continue Reading

Latest

ಇಂದು ಮಧ್ಯಾಹ್ನ 12ಕ್ಕೆ ಎಸ್‌ಎಸ್‌ಎಲ್‌ಸಿ ಫಲಿತಾಂಶ ಪ್ರಕಟ: ಶಿಕ್ಷಣ ಇಲಾಖೆಯಿಂದ ಅಧಿಕೃತ ಘೋಷಣೆ!

VISTARANEWS.COM


on

ಬೆಂಗಳೂರು: ರಾಜ್ಯದ ಲಕ್ಷಾಂತರ ವಿದ್ಯಾರ್ಥಿಗಳು ಮತ್ತು ಪೋಷಕರು ಕಾತುರದಿಂದ ಕಾಯುತ್ತಿದ್ದ ಎಸ್‌ಎಸ್‌ಎಲ್‌ಸಿ (SSLC) ಪರೀಕ್ಷೆಯ ಫಲಿತಾಂಶ ಇಂದು (ಏಪ್ರಿಲ್ 23, 2026) ಮಧ್ಯಾಹ್ನ 12 ಗಂಟೆಗೆ ಪ್ರಕಟವಾಗಲಿದೆ. ಶಿಕ್ಷಣ ಸಚಿವ ಮಧು ಬಂಗಾರಪ್ಪ ಅವರು ಸುದ್ದಿಗೋಷ್ಠಿ ನಡೆಸಿ ಅಧಿಕೃತವಾಗಿ ಫಲಿತಾಂಶವನ್ನು ಬಿಡುಗಡೆ ಮಾಡಲಿದ್ದು, ರಾಜ್ಯದ ಒಟ್ಟು 2,870 ಕೇಂದ್ರಗಳಲ್ಲಿ ಪರೀಕ್ಷೆ ಬರೆದಿದ್ದ 8.65 ಲಕ್ಷಕ್ಕೂ ಹೆಚ್ಚು ವಿದ್ಯಾರ್ಥಿಗಳ ಶೈಕ್ಷಣಿಕ ಭವಿಷ್ಯ ಇಂದು ನಿರ್ಧಾರವಾಗಲಿದೆ. ಫಲಿತಾಂಶದ ನಂತರ ವಿದ್ಯಾರ್ಥಿಗಳು ಇಲಾಖೆಯ ಅಧಿಕೃತ ವೆಬ್‌ಸೈಟ್‌ಗಳಲ್ಲಿ ತಮ್ಮ ಅಂಕಪಟ್ಟಿಗಳನ್ನು ವೀಕ್ಷಿಸಬಹುದಾಗಿದೆ.

ಈ ಬಾರಿಯ ಫಲಿತಾಂಶದಲ್ಲಿ ತೃತೀಯ ಭಾಷೆ ಹಿಂದಿಗೆ ಸಂಬಂಧಿಸಿದಂತೆ ಮಹತ್ವದ ಬದಲಾವಣೆ ಮಾಡಲಾಗಿದೆ. ಈ ಹಿಂದೆ ಹಿಂದಿ ವಿಷಯಕ್ಕೆ ಗ್ರೇಡ್ ನೀಡಲು ಸರ್ಕಾರ ಯೋಚಿಸಿತ್ತಾದರೂ, ನ್ಯಾಯಾಲಯದ ಆದೇಶದ ಹಿನ್ನೆಲೆಯಲ್ಲಿ ಅಂಕಗಳನ್ನೇ ನೀಡಲು ಶಿಕ್ಷಣ ಇಲಾಖೆ ಅಂತಿಮ ನಿರ್ಧಾರ ಕೈಗೊಂಡಿದೆ. ಸಚಿವ ಮಧು ಬಂಗಾರಪ್ಪ ಅವರು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರೊಂದಿಗೆ ಸುದೀರ್ಘ ಚರ್ಚೆ ನಡೆಸಿದ ಬಳಿಕ ಈ ಕ್ರಮ ಕೈಗೊಳ್ಳಲಾಗಿದ್ದು, ವಿದ್ಯಾರ್ಥಿಗಳ ಅಂಕಪಟ್ಟಿಯಲ್ಲಿ ಎಲ್ಲ ವಿಷಯಗಳಿಗೂ ಅಂಕಗಳೇ ನಮೂದಾಗಲಿವೆ.

ಎಸ್‌ಎಸ್‌ಎಲ್‌ಸಿ ಫಲಿತಾಂಶದ ಸಂಭ್ರಮದ ನಡುವೆಯೇ ಇಂದಿನಿಂದ ರಾಜ್ಯಾದ್ಯಂತ ಸಿಇಟಿ (CET) ಪರೀಕ್ಷೆಗಳೂ ಆರಂಭವಾಗುತ್ತಿವೆ. ಈ ಬಾರಿ ದಾಖಲೆ ಮಟ್ಟದ 3.30 ಲಕ್ಷ ವಿದ್ಯಾರ್ಥಿಗಳು ಪರೀಕ್ಷೆಗೆ ನೋಂದಣಿ ಮಾಡಿಕೊಂಡಿದ್ದು, ಅಕ್ರಮಗಳನ್ನು ತಡೆಯಲು ಪರೀಕ್ಷಾ ಕೇಂದ್ರಗಳಲ್ಲಿ ಜಾಮರ್‌ಗಳನ್ನು ಅಳವಡಿಸಲಾಗಿದೆ. ಪರೀಕ್ಷಾ ಕೇಂದ್ರಗಳ ಸುತ್ತಮುತ್ತ 200 ಮೀಟರ್ ವ್ಯಾಪ್ತಿಯಲ್ಲಿ ನಿಷೇಧಾಜ್ಞೆ ಜಾರಿಗೊಳಿಸಲಾಗಿದ್ದು, ಪೊಲೀಸ್ ಆಯುಕ್ತ ಸೀಮಂತ್ ಕುಮಾರ್ ಸಿಂಗ್ ಅವರ ನೇತೃತ್ವದಲ್ಲಿ ಬಿಗಿ ಭದ್ರತೆ ಕಲ್ಪಿಸಲಾಗಿದೆ. ಕೆಇಎ (KEA) ಕಚೇರಿಯಿಂದಲೇ ಇಡೀ ಪರೀಕ್ಷಾ ಪ್ರಕ್ರಿಯೆಯ ಮೇಲೆ ಹದ್ದಿನ ಕಣ್ಣಿಡಲಾಗಿದೆ.

Continue Reading

Latest

ಜೈಲಿನಲ್ಲಿದ್ದುಕೊಂಡೆ ವಿಧ್ವಂಸ ಕೃತ್ಯಕ್ಕೆ ಸಂಚು: 7 ಆರೋಪಿಗಳಿಗೆ ಕಠಿಣ ಶಿಕ್ಷೆ ಪ್ರಕಟಿಸಿದ ಎನ್‌ ಐ ಎ ಕೋರ್ಟ್

VISTARANEWS.COM


on

ಬೆಂಗಳೂರು: ನಗರದ ಜೈಲಿನಲ್ಲಿದ್ದುಕೊಂಡೇ ದೇಶದ ವಿವಿಧೆಡೆ ವಿಧ್ವಂಸಕ ಕೃತ್ಯಗಳ ಎಸೆಗಲು ಸಂಚು ರೂಪಿಸಿದ್ದ ಲಷ್ಕರ್‌ ಎ ತೊಬ್ಯಾ ಸಂಪರ್ಕಿತ ಏಳು ಆರೋಪಿಗಳಿಗೆ ಎನ್‌ ಐ ಎ ನ್ಯಾಯಾಲಯ 7 ವರ್ಷಗಳ ಕಠಿಣ ಕಾರಾಗೃಹ ಶಿಕ್ಷೆ ಪ್ರಕಟಿಸಿದೆ.
ಅಪರಾಧಿಗಳಾದ ಲಷ್ಕರ್‌ – ಎ-ತೊಯ್ಬಾ ಸಂಪರ್ಕಿತ ಉಗ್ರ ಟಿ.ನಾಸಿರ್‌ ನೇತೃತ್ವದಲ್ಲಿ ಸಯ್ಯದ್ ಸುಹೈಲ್ ಖಾನ್, ಮೊಹಮ್ಮದ್ ಉಮರ್, ಜಾಹಿದ್ ತಬ್ರೇಜ್, ಸಯ್ಯದ್ ಮುದಸ್ಸಿರ್ ಪಾಶಾ, ಮೊಹಮ್ಮದ್ ಫೈಸಲ್ ರಬ್ಬಾನಿ ಮತ್ತು ಸಲ್ಮಾನ್ ಖಾನ್ ಶಿಕ್ಷೆಗೆ ಗುರಿಯಾದವರು. ಪ್ರಕರಣದಲ್ಲಿ ಆರೋಪಿಗಳು ತಪ್ಪೊಪ್ಪಿಕೊಂಡಿದ್ದರು.
ಇವರು ಬೆಂಗಳೂರಿನ ಪರಪ್ಪನ ಅಗ್ರಹಾರದ ಜೈಲಿನಲ್ಲಿದ್ದುಕೊಂಡೇ ಯುವಕರನ್ನು ಉಗ್ರವಾದದತ್ತ ಆಕರ್ಷಿಸಿ, ಮತಾಂತರಗೊಳಿಸಿ ದೇಶದಲ್ಲಿ ದಾಳಿ ನಡೆಸಲು ಸಂಚು ರೂಪಿಸಿದ್ದರು. ಆರೋಪ ರುಜುವಾತಾದ ಹಿನ್ನೆಲೆಯಲ್ಲಿ ಕೋರ್ಟ್‌ ಏಳು ವರ್ಷ ಜೈಲು ಶಿಕ್ಷೆ ಸೇರಿದಂತೆ 48 ಸಾವಿರ ರೂಪಾಯಿ ದಂಡ ವಿಧಿಸಿದೆ.
2023ರ ಜುಲೈನಲ್ಲಿ ಶಸ್ತ್ರಾಸ್ತ್ರಗಳು, ಗುಂಡುಗಳು ಮತ್ತು ಡಿಜಿಟಲ್ ಸಾಧನಗಳನ್ನು ವಶಪಡಿಸಿಕೊಂಡ ನಂತರ ಬೆಂಗಳೂರು ಸೆಂಟ್ರಲ್ ಕ್ರೈಮ್ ಬ್ರಾಂಚ್ (CCB) ಈ ಬಗ್ಗೆ ಪ್ರಕರಣ ದಾಖಲಿಸಿತ್ತು. ಇವರು ಬೆಂಗಳೂರಿನಲ್ಲಿಯೂ ಉಗ್ರ ದಾಳಿಗಳನ್ನು ನಡೆಸುವ ಯೋಜನೆ ರೂಪಿಸಿದ್ದರು ಎಂಬುದು ಬಯಲಾಗಿತ್ತು. ನಂತರ ಈ ಪ್ರಕರಣದ ತನಿಖೆಯನ್ನು ಎನ್‌ಐಎ ಕೈಗೆತ್ತಿಕೊಂಡಿತ್ತು.
2008ರ ಬೆಂಗಳೂರು ಸರಣಿ ಸ್ಫೋಟ ಪ್ರಕರಣದಲ್ಲಿ ಟಿ. ನಾಸೀರ್ ಅದಾಗಲೇ ಜೀವಾವಧಿ ಶಿಕ್ಷೆಯನ್ನು ಅನುಭವಿಸುತ್ತಿದ್ದ ಎಂಬುದು ಗಮನಾರ್ಹ. ಬಂಧಿತರಲ್ಲಿ ಸಲ್ಮಾನ್ ಖಾನ್ ಎಂಬಾತನನ್ನು ರುವಾಂಡಾ ಗಣರಾಜ್ಯದಿಂದ ಹಸ್ತಾಂತರದ ಮೂಲಕ ಭಾರತಕ್ಕೆ ತರಲಾಗಿತ್ತು.
ಈ ಪ್ರಕರಣದಲ್ಲಿ 11 ಮಂದಿ ಬಂಧಿತ ಆರೋಪಿಗಳು ಹಾಗೂ ಪರಾರಿಯಾಗಿರುವ ಜುನೈದ್ ಅಹ್ಮದ್ ವಿರುದ್ಧ ಎನ್‌ಐಎ ಆರೋಪಪಟ್ಟಿ ಸಲ್ಲಿಸಿತ್ತು.

Continue Reading
Advertisement
Latest9 minutes ago

ಬೆಳಗಾವಿಯಲ್ಲಿ ನಿರ್ಮಾಣವಾಗಲಿದೆ ಭವ್ಯ ತಿರುಪತಿ ತಿಮ್ಮಪ್ಪನ ದೇಗುಲ: 100 ಕೋಟಿ ವೆಚ್ಚ, 7 ಎಕರೆ ಜಾಗ ಮಂಜೂರು

Latest12 minutes ago

ಬ್ರೇಕ್ ವಿಫಲ:ಉತ್ತರ ಪ್ರದೇಶದಲ್ಲಿ ಭೀಕರ ಸರಣಿ ಅಪಘಾತ: 11 ಮಂದಿ ಸಜೀವ ದಹನ

Latest36 minutes ago

ಮಾರುಕಟ್ಟೆಯಲ್ಲಿ ನಿಂಬೆಹಣ್ಣಿಗೆ ಹೆಚ್ಚಾಯ್ತು ಡಿಮ್ಯಾಂಡ್‌! ಪೂರೈಕೆ ಕಟ್, ದರ ಡಬಲ್ – ಕಂಗಾಲಾದ ಗ್ರಾಹಕ

Latest1 hour ago

ಇಂದು ಮಧ್ಯಾಹ್ನ 12ಕ್ಕೆ ಎಸ್‌ಎಸ್‌ಎಲ್‌ಸಿ ಫಲಿತಾಂಶ ಪ್ರಕಟ: ಶಿಕ್ಷಣ ಇಲಾಖೆಯಿಂದ ಅಧಿಕೃತ ಘೋಷಣೆ!

Latest17 hours ago

ಫರ್ಮಾನ್ ಖಾನ್ ಜೊತೆ ಮದುವೆಯಾದ ಒಂದೇ ತಿಂಗಳಲ್ಲಿ ಮೊನಾಲಿಸಾ ಭೋಸ್ಲೆ ಗರ್ಭಿಣಿ!

Latest17 hours ago

ಎಸ್ಎಸ್ಎಲ್‌ಸಿ: ಹಿಂದಿಗೆ ಈ ಬಾರಿ ಗ್ರೇಡ್‌ ಬದಲು ಅಂಕ: ಸಚಿವ ಮಧು ಬಂಗಾರಪ್ಪ ಸ್ಪಷ್ಟನೆ

Latest18 hours ago

ಇರಾನ್‌ ಸರಕು ಸಾಗಣೆ ಹಡಗಿನ ಮೇಲೆ ಗುಂಡಿನ ದಾಳಿ: ಅಮೆರಿಕ ವಿರುದ್ಧ ಆಕ್ರೋಶ

Latest18 hours ago

ಹೋಮ್‌ಸ್ಟೇನಲ್ಲಿ ಅತ್ಯಾಚಾರ: ಸುತ್ತೋಲೆ ಹೊರಡಿಸಲಾಗಿದೆ ಎಂದ ಸಚಿವ ಪರಮೇಶ್ವರ್‌

Latest19 hours ago

ಜೈಲಿನಲ್ಲಿದ್ದುಕೊಂಡೆ ವಿಧ್ವಂಸ ಕೃತ್ಯಕ್ಕೆ ಸಂಚು: 7 ಆರೋಪಿಗಳಿಗೆ ಕಠಿಣ ಶಿಕ್ಷೆ ಪ್ರಕಟಿಸಿದ ಎನ್‌ ಐ ಎ ಕೋರ್ಟ್

Latest19 hours ago

ಸಚಿವ ಪ್ರಲ್ಹಾದ ಜೋಶಿ ಮನವಿಗೆ ಸ್ಪಂದನೆ; “ಧಾರವಾಡ ಆಕಾಶವಾಣಿ ಕೇಂದ್ರ” ಸ್ಥಳಾಂತರಿಸದಿರಲು ನಿರ್ಧಾರ

galipata neetu
ಕಿರುತೆರೆ2 years ago

Kanyadana Serial: ಕಿರುತೆರೆಗೆ ಮತ್ತೆ ಎಂಟ್ರಿ ಕೊಟ್ಟ ʻಗಾಳಿಪಟʼ ಖ್ಯಾತಿಯ ʻನೀತುʼ!

Kannada Serials
ಕಿರುತೆರೆ3 years ago

Kannada Serials TRP: 2ನೇ ಸ್ಥಾನದಲ್ಲಿ 2 ಧಾರಾವಾಹಿಗಳು; ಟಿಆರ್‌ಪಿ ರೇಸ್‌ನಲ್ಲಿಲ್ಲ ಭಾಗ್ಯಲಕ್ಷ್ಮೀ!

Sharmitha Gowda in bikini
ಕಿರುತೆರೆ3 years ago

Geetha Serial Kannada: ನಿದ್ದೆ ಕದ್ದ ಚೋರಿ! ನಟಿ `ಭಾನುಮತಿ’ ಹಾಟ್‌ ಪೋಟೊಗಳಿಗೆ ಫ್ಯಾನ್ಸ್ ಫುಲ್ ಫಿದಾ

Kannada Serials
ಕಿರುತೆರೆ3 years ago

Kannada Serials TRP: ನಾಲ್ಕನೇ ಸ್ಥಾನಕ್ಕೆ ಕುಸಿತ ಕಂಡ ʻಸೀತಾ ರಾಮʼ; ಟಿಆರ್‌ಪಿ ರೇಸ್‌ಗೆ ʻಭಾಗ್ಯಲಕ್ಷ್ಮಿʼ ಬ್ಯಾಕ್‌!

Bigg Boss- Saregamapa 20 average TRP
ಕಿರುತೆರೆ3 years ago

Kannada Serials TRP: ಏಳನೇ ಸ್ಥಾನಕ್ಕೆ ʻಅಮೃತಧಾರೆʼ ಕುಸಿತ; ಬಿಗ್‌ ಬಾಸ್‌-ಸರಿಗಮಪ ಟಿಆರ್‌ಪಿ ಎಷ್ಟು?

Kannada Serials
ಕಿರುತೆರೆ3 years ago

Kannada Serials TRP: ಟಿಆರ್‌ಪಿಯಲ್ಲಿ ʻಭಾಗ್ಯಲಕ್ಷ್ಮೀʼ ಹವಾ; ʻಪುಟ್ಟಕ್ಕನ ಮಕ್ಕಳುʼ ಧಾರಾವಾಹಿಗೆ ಸಂಕಷ್ಟ!

Bigg Boss' dominates TRP; Sita Rama fell to the sixth position
ಕಿರುತೆರೆ2 years ago

Kannada Serials TRP: ಟಿಆರ್‌ಪಿಯಲ್ಲಿ ʻಬಿಗ್ ಬಾಸ್ʼದೇ ಮೇಲುಗೈ; 6ನೇ ಸ್ಥಾನಕ್ಕೆ ಕುಸಿದ ʻಸೀತಾ ರಾಮʼ

geetha serial Dhanush gowda engagement
ಕಿರುತೆರೆ2 years ago

Dhanush Gowda: ಗೀತಾ ಧಾರಾವಾಹಿ ನಟನ ನಿಶ್ಚಿತಾರ್ಥ; ಭವ್ಯಾಳ ಕಮೆಂಟ್‌ ಬಾಕ್ಸ್‌ ಆಫ್‌!

Kannada Serials
ಕಿರುತೆರೆ3 years ago

Kannada Serials TRP: ಟಿಆರ್‌ಪಿಯಲ್ಲಿ ಏರಿಕೆ ಕಂಡ ʻಅಮೃತಧಾರೆʼ; ʻಗಟ್ಟಿಮೇಳʼಕ್ಕೆ ನಾಲ್ಕನೇ ಸ್ಥಾನ!

varun
ಕಿರುತೆರೆ2 years ago

Brindavana Serial: ʼಬೃಂದಾವನʼ ಧಾರಾವಾಹಿಯಲ್ಲಿ ದೊಡ್ಡ ಟ್ವಿಸ್ಟ್‌; ಪ್ರಮುಖ ಪಾತ್ರಧಾರಿಯೇ ಬದಲು

Action Prince Dhruva Sarja much awaited film Martin to hit the screens on October 11
ಸಿನಿಮಾ2 years ago

Martin Movie : ಆ್ಯಕ್ಷನ್‌ ಪ್ರಿನ್ಸ್‌ ಧ್ರುವ ಸರ್ಜಾ ಅಭಿನಯದ ಬಹು ನಿರೀಕ್ಷಿತ ʻಮಾರ್ಟಿನ್ʼ ಚಿತ್ರ ಅಕ್ಟೋಬರ್ 11ರಂದು ತೆರೆಗೆ

Sudeep's birthday location shift
ಸ್ಯಾಂಡಲ್ ವುಡ್2 years ago

Kichcha Sudeepa: ಸುದೀಪ್‌ ಬರ್ತ್‌ ಡೇ ಲೊಕೇಶನ್‌ ಶಿಫ್ಟ್; ದರ್ಶನ್‌ ಭೇಟಿಗೆ ಬಳ್ಳಾರಿ ಜೈಲಿಗೆ ಹೋಗ್ತಾರಾ ಕಿಚ್ಚ

Actor Darshan
ಸ್ಯಾಂಡಲ್ ವುಡ್2 years ago

Actor Darshan : ಬಿಗಿ ಭದ್ರತೆಯಲ್ಲಿ ಪರಪ್ಪನ ಅಗ್ರಹಾರದಿಂದ ದರ್ಶನ್‌ ಬಳ್ಳಾರಿಗೆ ಸ್ಥಳಾಂತರ; ಸೆಲ್‌ನಲ್ಲಿ ಏನೆಲ್ಲ ವ್ಯವಸ್ಥೆ ಇದೆ ಗೊತ್ತಾ?

ಮಳೆ2 years ago

Karnataka rain : ವಿಜಯನಗರದಲ್ಲಿ ಮಳೆ ಅವಾಂತರ; ಹರಿಯುವ ಹಳ್ಳದಲ್ಲೇ ಶವ ಸಾಗಿಸಿದ ಗ್ರಾಮಸ್ಥರು

karnataka Weather Forecast
ಮಳೆ2 years ago

Karnataka Weather : ಭೀಮಾನ ಅಬ್ಬರಕ್ಕೆ ನಲುಗಿದ ನೆರೆ ಸಂತ್ರಸ್ತರು; ನಾಳೆಗೆ ಇಲ್ಲೆಲ್ಲ ಮಳೆ ಅಲರ್ಟ್‌

Bellary news
ಬಳ್ಳಾರಿ2 years ago

Bellary News : ಫಿಲ್ಮಂ ಸ್ಟೈಲ್‌ನಲ್ಲಿ ಕಾಡಿನಲ್ಲಿ ನಿಧಿ ಹುಡುಕಾಟ; ಅತ್ಯಾಧುನಿಕ ಟೆಕ್ನಾಲಜಿ ಬಳಕೆ ಮಾಡಿದ ಖದೀಮರ ಗ್ಯಾಂಗ್‌

Maravoor bridge in danger Vehicular traffic suspended
ದಕ್ಷಿಣ ಕನ್ನಡ2 years ago

Maravoor Bridge : ಕಾಳಿ ನದಿ ಸೇತುವೆ ಬಳಿಕ ಅಪಾಯದಲ್ಲಿದೆ ಮರವೂರು ಸೇತುವೆ; ವಾಹನ ಸಂಚಾರ ಸ್ಥಗಿತ

Wild Animals Attack
ಚಿಕ್ಕಮಗಳೂರು2 years ago

Wild Animals Attack : ಮಲೆನಾಡಲ್ಲಿ ಕಾಡಾನೆಯ ದಂಡು; ತೋಟಕ್ಕೆ ತೆರಳುವ ಕಾರ್ಮಿಕರಿಗೆ ಎಚ್ಚರಿಕೆ

Karnataka Weather Forecast
ಮಳೆ2 years ago

Karnataka Weather : ಮಳೆಯಾಟಕ್ಕೆ ಮುಂದುವರಿದ ಮಕ್ಕಳ ಗೋಳಾಟ; ಆಯ ತಪ್ಪಿದರೂ ಜೀವಕ್ಕೆ ಅಪಾಯ

assault case
ಬೆಳಗಾವಿ2 years ago

Assault Case : ಬೇರೊಬ್ಬ ಯುವತಿ ಜತೆಗೆ ಸಲುಗೆ; ಪ್ರಶ್ನಿಸಿದ್ದಕ್ಕೆ ಪತ್ನಿಗೆ ಮನಸೋ ಇಚ್ಛೆ ಥಳಿಸಿದ ಪಿಎಸ್‌ಐ

ಟ್ರೆಂಡಿಂಗ್‌