We will correct BJPs mistakes in textbooks says HC Mahadevappa Textbook Revision: ಪಠ್ಯದಲ್ಲಿನ ಬಿಜೆಪಿ ಎಡವಟ್ಟುಗಳನ್ನು ನಾವು ತಿದ್ದುತ್ತೇವೆ: ಸಚಿವ ಎಚ್‌ ಸಿ ಮಹದೇವಪ್ಪ - Vistara News

ಕರ್ನಾಟಕ

Textbook Revision: ಪಠ್ಯದಲ್ಲಿನ ಬಿಜೆಪಿ ಎಡವಟ್ಟುಗಳನ್ನು ನಾವು ತಿದ್ದುತ್ತೇವೆ: ಸಚಿವ ಎಚ್‌ ಸಿ ಮಹದೇವಪ್ಪ

Textbook Revision: ಈ ಹಿಂದೆ ಬಿಜೆಪಿ ಸರ್ಕಾರದಲ್ಲಿ ವಿವಾದ ಉಂಟುಮಾಡಿದ್ದ ಪಠ್ಯ ಪುಸ್ತಕ ಪರಿಷ್ಕರಣೆ ವಿಚಾರ ಇದೀಗ ಮತ್ತೆ ಮುನ್ನೆಲೆಗೆ ಬಂದಿದೆ. ಬಿಜೆಪಿ ಸರ್ಕಾರದಲ್ಲಿ ಆಗಿದ್ದ ಎಡವಟ್ಟುಗಳನ್ನು ನಾವು ಸರಿಪಡಿಸುತ್ತೇವೆ ಎಂದು ಕಾಂಗ್ರೆಸ್‌ ನಾಯಕರು ಹೇಳುತ್ತಿದ್ದಾರೆ.

VISTARANEWS.COM


on

HC Mahadevappa in mysore
ಮಹತ್ವದ, ಕುತೂಹಲಕರ ಸುದ್ದಿಗಾಗಿ ಫಾಲೊ ಮಾಡಿ
Koo

ಮೈಸೂರು: ಬಿಜೆಪಿ ಪಠ್ಯ ಪುಸ್ತಕ ವಿಚಾರದಲ್ಲಿ ಮಾಡಿರುವ ಎಡವಟ್ಟುಗಳನ್ನ ನಾವು ತಿದ್ದುತ್ತೇವೆ. ಇತಿಹಾಸ ಪುರುಷರನ್ನೇ ಇವರು ಇತಿಹಾಸ ಪುರುಷರಲ್ಲ ಎಂದು ಹೇಳಿದ್ದಾರೆ. ಈ ತಪ್ಪುಗಳನ್ನು ತಿದ್ದಬೇಕು (Textbook Revision) ತಾನೇ. ನಾವು ಚುನಾವಣೆಗೆ ಮುನ್ನವೂ ಈ ವಿಚಾರವನ್ನು ಹೇಳಿದ್ದೇವೆ. ಈಗ ಅದನ್ನು ಮಾಡುತ್ತೇವೆ, ವಾಸ್ತವ ಸತ್ಯವನ್ನು ಪಠ್ಯದಲ್ಲಿ ಇಡುತ್ತೇವೆ ಎಂದು ಸಚಿವ ಡಾ. ಎಚ್‌.ಸಿ.ಮಹದೇವಪ್ಪ ಹೇಳಿದ್ದಾರೆ.

ನಗರದಲ್ಲಿ ಮಂಗಳವಾರ ಮಾತನಾಡಿರುವ ಅವರು, ಅವರು ಬರೆದಿದ್ದೇ ಇತಿಹಾಸವಲ್ಲ. ವಾಸ್ತವ ಸತ್ಯವನ್ನು ಪಠ್ಯದಲ್ಲಿ ಇಡುತ್ತೇವೆ. ಸತ್ಯ ಅಲ್ಲದನ್ನು ತೆಗೆದು ಹಾಕುತ್ತೇ ಎಂದು ಹೇಳಿದದ್ದಾರೆ.

ಇದನ್ನೂ ಓದಿ | Text Books: ರೋಹಿತ್‌ ಚಕ್ರತೀರ್ಥ ಸಮಿತಿಯಲ್ಲಿ ಶಿಕ್ಷಣ ತಜ್ಞರೇ ಇರಲಿಲ್ಲ: ಅವರು ಮಾಡಿದ್ದನ್ನು ಕಿತ್ತು ಎಸೆಯಿರಿ ಎಂದ ದೇವನೂರು ಮಹಾದೇವ

ಬಿಜೆಪಿಗೆ ಆಡಳಿತ ವಿರೋಧಿ ಅಲೆ ಇತ್ತು. ಆ ವಿರೋಧಿ ಅಲೆ ಜತೆಗೆ ನಮ್ಮ ಗ್ಯಾರೆಂಟಿಯನ್ನು ನೋಡಿ ಜನ ಬಹುಮತ ಕೊಟ್ಟಿದ್ದಾರೆ. ಈಗ ಬಿಜೆಪಿ ತಮ್ಮ ಆಡಳಿತ ವಿರೋಧಿ ವೈಫಲ್ಯವನ್ನು ಮುಚ್ಚಿಕೊಳ್ಳಲು ಕಾಂಗ್ರೆಸ್ ಮೇಲೆ ಉಗುಳು ಅಚ್ಚುವ ಕೆಲಸ ಮಾಡುತ್ತಿದೆ. ಬಿಜೆಪಿ ಅವಧಿಯಲ್ಲಿ ಭ್ರಷ್ಟಾಚಾರ ಮುಗಿಲು ಮುಟ್ಟಿತ್ತು. ಜನರು ಅತೀವ ಸಂಕಷ್ಟದಲ್ಲಿದ್ದರು. ಇದರಿಂದ ಬಿಜೆಪಿ ರಾಜ್ಯದಲ್ಲಿ ತಿರಸ್ಕೃತವಾಗಿದೆ. ಈ ಚರ್ಚೆಯನ್ನ ಮರೆ ಮಾಚಲು ಗ್ಯಾರಂಟಿ ಕಾರ್ಡ್ ವಿಚಾರವನ್ನು ದೊಡ್ಡದು ಮಾಡುತ್ತಿದ್ದಾರೆ ಎಂದು ಕಿಡಿಕಾರಿದರು.

ಹಂತ ಹಂತವಾಗಿ ಪಠ್ಯ ಪರಿಷ್ಕರಣೆ: ಮಧು ಬಂಗಾರಪ್ಪ

Minister Madhu bangarappa talks about textbooks revision

ಬೆಂಗಳೂರು: ಈಗಾಗಲೇ ಪಠ್ಯ ಪರಿಷ್ಕರಣೆ ಬಗ್ಗೆ ನಮ್ಮ ಪ್ರಣಾಳಿಕೆಯಲ್ಲಿ ಹೇಳಿದ್ದೇವೆ. ಹಂತ ಹಂತವಾಗಿ ಪಠ್ಯ ಪರಿಷ್ಕರಣೆ ಮಾಡುತ್ತೇವೆ. ಮಕ್ಕಳಿಗೆ ಅನಾನುಕೂಲವಾಗುವಂತಹ ಅಂಶಗಳನ್ನು ತೆಗೆಯುತ್ತೇವೆ. ವಿದ್ಯಾರ್ಥಿಗಳ ಭವಿಷ್ಯಕ್ಕೆ ತೊಂದರೆ ಆಗದಂತೆ ಕ್ರಮ ಆಗಲಿದೆ ಎಂದು ಪ್ರಾಥಮಿಕ ಶಿಕ್ಷಣ ಸಚಿವ ಮಧು ಬಂಗಾರಪ್ಪ ಹೇಳಿದ್ದಾರೆ.

ನಗರದಲ್ಲಿ ಪಠ್ಯ ಪರಿಷ್ಕರಣೆ ಬಗ್ಗೆ ಪ್ರತಿಕ್ರಿಯಿಸಿರುವ ಅವರು, ಈಗಾಗಲೇ ಸಿಎಂ ಸಿದ್ದರಾಮಯ್ಯ ಜತೆ ಈ ಬಗ್ಗೆ ಚರ್ಚಿಸಲಾಗಿದೆ. ಅವರು ಕೆಲವೊಂದು ಸಲಹೆಗಳನ್ನ ನೀಡಿದ್ದಾರೆ. ಹಿಜಾಬ್ ಸಂಬಂಧ ಕೆಲವೊಂದು ಕಾನೂನು ತೊಡಕುಗಳಿವೆ. ಎಲ್ಲಾ ವಿದ್ಯಾರ್ಥಿಗಳಿಗೂ ಅನುಕೂಲವಾಗುವಂತೆ ಕಾನೂನು ಹೋರಾಟ ನಡೆಸುತ್ತೇವೆ. ಶೈಕ್ಷಣಿಕ ವರ್ಷ ಆರಂಭವಾಗುತ್ತಿದೆ, ಹಾಗಾಗಿ ಎಲ್ಲಾ ರೀತಿಯ ಸಿದ್ಧತೆಯನ್ನೂ ಮಾಡಿಕೊಳ್ಳಲಾಗಿದೆ. ನೆನ್ನೆಯಷ್ಟೇ ಇಲಾಖಾಧಿಕಾರಿಗಳ ಜತೆ ಸಭೆ ನಡೆಸಿದ್ದೇನೆ. ಯಾವುದೇ ಗೊಂದಲಗಳಿಲ್ಲದೆ ವಿದ್ಯಾರ್ಥಿಗಳಿಗೆ ಅನುಕೂಲ ಮಾಡಲಾಗುತ್ತದೆ ಎಂದು ತಿಳಿಸಿದರು.

ಬುಧವಾರ ನಾನೇ ಶಿವಮೊಗ್ಗ ಗ್ರಾಮಾಂತರ ಕ್ಷೇತ್ರದಲ್ಲಿ ಶಾಲೆಗಳಿಗೆ ಭೇಟಿ ನೀಡುತ್ತೇನೆ. ಶಾಲಾ ಮಕ್ಕಳನ್ನು ನಾನೇ ಬರಮಾಡಿಕೊಳ್ಳುತ್ತೇನೆ. ಪಠ್ಯ ಪುಸ್ತಕ, ಸಮವಸ್ತ್ರ ವಿತರಣೆಯಲ್ಲಿ ಯಾವುದೇ ಗೊಂದಲ ಇಲ್ಲ. ಎಲ್ಲ ಸಿದ್ಧತೆಗಳು ಸಮಾರೋಪಾದಿಯಲ್ಲಿ ಸಾಗಿವ ಎಂದು ಹೇಳಿದರು.

ಇದನ್ನೂ ಓದಿ | Textbook Revision: ಹಿಜಾಬ್‌ ಓಕೆ, ಸೂಲಿಬೆಲೆ ಪಠ್ಯಕ್ಕೆ ಕತ್ತರಿ, ಟಿಪ್ಪು ಪಾಠ ಸೇರ್ಪಡೆ: ಸಾಹಿತಿಗಳ ಒತ್ತಾಯ, ಸಿದ್ದರಾಮಯ್ಯ ಏನಂದ್ರು?

ಬಿಜೆಪಿ ಸರ್ಕಾರ ಇತಿಹಾಸ ತಿರುಚುವ ಕೆಲಸ ಮಾಡಿತ್ತು: ದಿನೇಶ್ ಗುಂಡೂರಾವ್

ಬೆಂಗಳೂರು: ಬಿಜೆಪಿ ಸರ್ಕಾರ ಇತಿಹಾಸ ತಿರುಚುವ ಕೆಲಸ ಮಾಡಿತ್ತು. ಉದ್ದೇಶಪೂರ್ವಕವಾಗಿ ಅನೇಕ ವಿಚಾರಗಳನ್ನು ಪಠ್ಯ ಪುಸ್ತಕದಿಂದ ತೆಗೆದಿದ್ದರು. ಅದೆಲ್ಲವೂ ನಮಗೆ ಗೊತ್ತಿದೆ. ಈ ಬಗ್ಗೆ ಸಾರ್ವಜನಿಕವಾಗಿಯೂ ಚರ್ಚೆಯಾಗಿದೆ. ಅದನ್ನು ಶಿಕ್ಷಣ ಸಚಿವರು ಸರಿಪಡಿಸುವ ಕೆಲಸ ಮಾಡುತ್ತಾರೆ ಎಂದು ಸಚಿವ ದಿನೇಶ್ ಗುಂಡೂರಾವ್ ಹೇಳಿದ್ದಾರೆ.

ಪಠ್ಯ ಪುಸ್ತಕ ಪರಿಷ್ಕರಣೆ ಬಗ್ಗೆ ಸಿಎಂಗೆ ಸಾಹಿತಿಗಳ ಮನವಿ ವಿಚಾರಕ್ಕೆ ಪ್ರತಿಕ್ರಿಯಿಸಿ, ಪಠ್ಯ ಪರಿಷ್ಕರಣೆ ನನ್ನ ಇಲಾಖೆ ವ್ಯಾಪ್ತಿಗೆ ಬರುವುದಿಲ್ಲ, ಆ ಬಗ್ಗೆ ನನಗೆ ಹೆಚ್ಚಿನ ಮಾಹಿತಿ ಇಲ್ಲ. ಶಿಕ್ಷಣ ಸಚಿವರು, ಸಿಎಂ ಇದ್ದಾರೆ. ಅವರು ಕೂಲಂಕಷವಾಗಿ ಚರ್ಚಿಸಿ ತೀರ್ಮಾನ ಮಾಡುತ್ತಾರೆ ಎಂದು ತಿಳಿಸಿದರು.

ಕ್ಷಣ ಕ್ಷಣದ ಮಾಹಿತಿಗಾಗಿ Vistara News FaceBook ಪೇಜ್ ಫಾಲೋ ಮಾಡಿ
ಮಹತ್ವದ ಮಾಹಿತಿಗಾಗಿ ವಿಸ್ತಾರ ನ್ಯೂಸ್ ಆ್ಯಪ್ ಉಚಿತವಾಗಿ ಡೌನ್ ಲೋಡ್ ಮಾಡಿಕೊಳ್ಳಿ: Andriod App | IOS App
Continue Reading
Click to comment

Leave a Reply

Your email address will not be published. Required fields are marked *

ಕರ್ನಾಟಕ

Valmiki Corporation Scam: ಸಚಿವ ನಾಗೇಂದ್ರ ಇಂದೇ ರಾಜೀನಾಮೆ: ಖಚಿತಪಡಿಸಿದ ಡಿಸಿಎಂ ಡಿಕೆಶಿ

Valmiki Corporation Scam: ವಾಲ್ಮೀಕಿ ಅಭಿವೃದ್ಧಿ ನಿಗಮದ ಅಕ್ರಮದಲ್ಲಿ ಹೆಸರು ಕೇಳಿಬಂದ ಹಿನ್ನೆಲೆಯಲ್ಲಿ ಸಚಿವ ನಾಗೇಂದ್ರ ಸ್ವಯಂಪ್ರೇರಿತವಾಗಿ ರಾಜೀನಾಮೆಗೆ ಮುಂದಾಗಿದ್ದಾರೆ ಎಂದು ಉಪಮುಖ್ಯಮಂತ್ರಿ ಡಿಕೆಶಿ ತಿಳಿಸಿದ್ದಾರೆ.

VISTARANEWS.COM


on

Valmiki corporation Scam
Koo

ಬೆಂಗಳೂರು: ವಾಲ್ಮೀಕಿ ಅಭಿವೃದ್ಧಿ ನಿಗಮದ ಅಕ್ರಮದಲ್ಲಿ (Valmiki Corporation Scam) ಹೆಸರು ಕೇಳಿಬಂದಿರುವ ಸಚಿವ ನಾಗೇಂದ್ರ (Minister B Nagendra) ಇಂದೇ ತಮ್ಮ ರಾಜೀನಾಮೆಯನ್ನು ಸಿಎಂಗೆ ತಲುಪಿಸಲಿದ್ದಾರೆ. ಈ ವಿಚಾರವನ್ನು ಡಿಸಿಎಂ ಡಿಕೆ ಶಿವಕುಮಾರ್‌ ಖಚಿತಪಡಿಸಿದ್ದಾರೆ.

ನಗರದಲ್ಲಿ ಸುದ್ದಿಗಾರರಿಗೆ ಪ್ರತಿಕ್ರಿಯಿಸಿದ ಡಿಕೆಶಿ ಅವರು, “ನಾಗೇಂದ್ರ ಸ್ವಯಂಪ್ರೇರಿತವಾಗಿ ರಾಜೀನಾಮೆಗೆ ಮುಂದಾಗಿದ್ದಾರೆ”. ಹಗರಣದಿಂದಾಗಿ ಪಕ್ಷ ಹಾಗೂ ಸರ್ಕಾರದ ಘನತೆಗೆ ಧಕ್ಕೆ ಆಗಬಾರದೆಂದು ನಾಗೇಂದ್ರ ಸ್ವಯಂ ಪ್ರೇರಿತರಾಗಿ ಸಚಿವ ಸ್ಥಾನಕ್ಕೆ ರಾಜೀನಾಮೆ ನೀಡಲು ಮುಂದಾಗಿದ್ದಾರೆ ಎಂದು ಹೇಳಿದ್ದಾರೆ.

ನಾನು, ಗೃಹ ಸಚಿವರು, ಸಚಿವ ನಾಗೇಂದ್ರ ಅವರ ಜತೆ ಚರ್ಚೆ ಮಾಡಿದ್ದೇವೆ. ಅವರು ಈ ಅಕ್ರಮದಲ್ಲಿ ಭಾಗಿಯಾಗಿಲ್ಲ. ಹೀಗಾಗಿ ಅವರು ರಾಜೀನಾಮೆ ಕೊಡುವ ಅಗತ್ಯವಿಲ್ಲ. ಆದರೆ, ಪಕ್ಷದ ಹಾಗೂ ಸರ್ಕಾರದ ಘನತೆಗೆ ಧಕ್ಕೆ ಬರಬಾರದು ಎಂದು ಸ್ವತಃ ನಾಗೇಂದ್ರ ಅವರೇ ರಾಜೀನಾಮೆ ನೀಡಲು ಮುಂದಾಗಿದ್ದಾರೆ. ಇಂದೇ ಅವರು ರಾಜೀನಾಮೆ ನೀಡಬಹುದು ಎಂದು ತಿಳಿಸಿದ್ದಾರೆ.

ಸರ್ಕಾರ ರಾಜೀನಾಮೆ ಸ್ವೀಕರಿಸಲಿದೆಯೇ ಎಂಬ ಪ್ರಶ್ನೆಗೆ ಉತ್ತರಿಸಿ ಮುಖ್ಯಮಂತ್ರಿಗಳು ಪಕ್ಷದ ಹೈಕಮಾಂಡ್ ಜತೆ ಚರ್ಚೆ ಮಾಡಿ ನಿರ್ಧಾರವನ್ನು ಕೈಗೊಳ್ಳಲಿದ್ದಾರೆ ಎಂದು ಹೇಳಿದ್ದಾರೆ.

ನಾಗೇಂದ್ರ ಬೆಂಬಲಕ್ಕೆ ನಿಂತ ಸಿಎಂ ಸಿದ್ದರಾಮಯ್ಯ!

ವಾಲ್ಮೀಕಿ ನಿಗಮ ಹಗರಣದ ಹಿನ್ನೆಲೆಯಲ್ಲಿ (Valmiki Corporation Scam) ಸಚಿವ ಬಿ. ನಾಗೇಂದ್ರ ರಾಜೀನಾಮೆ ಪಡೆಯಬೇಕು ಎಂದು ಬಿಜೆಪಿ ನಾಯಕರು ಪ್ರತಿಭಟನೆ ನಡೆಸಿ ರಾಜ್ಯಪಾಲರಿಗೆ ಮನವಿ ಸಲ್ಲಿಸಿದ್ದಾರೆ. ಮತ್ತೊಂದೆಡೆ ಸಿಎಂ ಸಿದ್ದರಾಮಯ್ಯ ಬೆಂಬಲಕ್ಕೆ ನಿಂತಿದ್ದರಿಂದ ಸದ್ಯಕ್ಕೆ ಸಚಿವ ನಾಗೇಂದ್ರ ಸೇಫ್‌ ಆಗಿದ್ದಾರೆ.

ಸಚಿವ ನಾಗೇಂದ್ರ ರಾಜೀನಾಮೆಗೆ ಸೂಚನೆ ಕೊಟ್ಟೀದ್ದೀರಾ ಎಂಬ ವಿಧಾನಸೌಧದಲ್ಲಿ ಪ್ರಶ್ನೆಗೆ ಸಿಎಂ ಸಿದ್ದರಾಮಯ್ಯ ಪ್ರತಿಕ್ರಿಯಿಸಿ, ಪ್ರತಿಭಟನೆ, ಪಾದಯಾತ್ರೆ ಮಾಡುವವರು ಮಾಡಲಿ,. ಕರೆದು ಮಾತನಾಡಿದ ತಕ್ಷಣ ರಾಜೀನಾಮೆ ಕೊಡಿ ಎಂದರ್ಥವಲ್ಲ. ಪ್ರಕರಣದ ತನಿಖೆ ಆಗಲಿ, ವರದಿ ಬರಲಿ ಎಂದು ಹೇಳುವ ಮೂಲಕ ಸದ್ಯಕ್ಕೆ ಸಚಿವರ ರಾಜೀನಾಮೆ ಇಲ್ಲ ಎಂದು ಪರೋಕ್ಷವಾಗಿ ಹೇಳಿದರು.

ಬಿಜೆಪಿಯವರು ರಾಜಭವನಕ್ಕೆ ಹೋದರೆ ಹೋಗಲಿ, ವಾಲ್ಮೀಕಿ ಅಭಿವೃದ್ಧಿ ನಿಗಮದ ಅವ್ಯವಹಾರ ಕುರಿತ ತನಿಖೆಗೆ ಎಸ್ಐಟಿ ರಚನೆ ಆಗಿದೆ. ಎಸ್ಐಟಿಯವರು ತನಿಖೆ ಮಾಡುತ್ತಿದ್ದಾರೆ. ತನಿಖೆ ಮುಗಿಯಲಿ ಎಂದು ಸಿಎಂ ಹೇಳಿದರು.

ನಾಗೇಂದ್ರರನ್ನು ಕರೆದು ಮಾತನಾಡಿದ್ದೀರಾ ಎಂಬ ಪ್ರಶ್ನೆಗೆ ಉತ್ತರಿಸಿ, ನಾನು ಎಲ್ಲ ಸಚಿವರನ್ನು ಕರೆದು ಮಾತನಾಡುತ್ತೇನೆ. ಅದರಂತೆ ನಾಗೇಂದ್ರ ಜತೆಗೂ ಮಾತನಾಡಿದ್ದೇನೆ ಎಂದರು. ಹಾಗಿದ್ದರೆ‌ ರಾಜೀನಾಮೆಗೆ ಸೂಚನೆ ನೀಡಿದ್ದೀರಾ ಎಂಬ ಪ್ರಶ್ನೆಗೆ, ಸಿಎಂ ಉತ್ತರಿಸದೇ ಮೌನಕ್ಕೆ ಶರಣಾದರು.

Continue Reading

ದಾವಣಗೆರೆ

Davanagere News: ಸಮರ್ಪಕ ಬಸ್‌ ಸೌಲಭ್ಯಕ್ಕೆ ಆಗ್ರಹಿಸಿ ಹೊನ್ನಾಳಿಯ ಗೋವಿನಕೋವಿ ಗ್ರಾಮಸ್ಥರ ಪ್ರತಿಭಟನೆ

Davanagere News: ಸಮರ್ಪಕ ಬಸ್‌ ಸೌಲಭ್ಯ ಕಲ್ಪಿಸಲು ಒತ್ತಾಯಿಸಿ, ನ್ಯಾಮತಿ ತಾಲೂಕಿನ ಗೋವಿನಕೋವಿ ಗ್ರಾಮದಲ್ಲಿ ಗುರುವಾರ ವಿದ್ಯಾರ್ಥಿಗಳು ಹಾಗೂ ಗ್ರಾಮಸ್ಥರು ಕೆಎಸ್‌ಆರ್‌ಟಿಸಿ ಬಸ್‌ಗಳನ್ನು ತಡೆದು ದಿಢೀರ್‌ ಪ್ರತಿಭಟನೆ ನಡೆಸಿದರು.

VISTARANEWS.COM


on

Protest demanding adequate bus facility at govinakovi village
Koo

ನ್ಯಾಮತಿ: ಸಮರ್ಪಕ ಬಸ್‌ ಸೌಲಭ್ಯ ಕಲ್ಪಿಸಲು ಒತ್ತಾಯಿಸಿ ಗೋವಿನಕೋವಿ ಗ್ರಾಮದಲ್ಲಿ ಗುರುವಾರ ವಿದ್ಯಾರ್ಥಿಗಳು ಹಾಗೂ ಗ್ರಾಮಸ್ಥರು ಕೆಎಸ್‌ಆರ್‌ಟಿಸಿ ಬಸ್‌ಗಳನ್ನು ತಡೆದು ದಿಢೀರ್‌ ಪ್ರತಿಭಟನೆ (Davanagere News) ನಡೆಸಿದರು.

ಹೊನ್ನಾಳಿ ಮತ್ತು ಶಿವಮೊಗ್ಗ ಮಾರ್ಗದಲ್ಲಿ ಸಾಗುವ ಕೆಎಸ್‌ಆರ್‌ಟಿಸಿ ಬಸ್‌ಗಳ ನಿಲುಗಡೆ ಮಾಡದಿರುವುದರಿಂದ ದಿನನಿತ್ಯ ಶಾಲಾ-ಕಾಲೇಜುಗಳಿಗೆ ತೆರಳುವ ವಿದ್ಯಾರ್ಥಿಗಳಿಗೆ ತೀವ್ರ ತೊಂದರೆಯಾಗಿದೆ. ಕೂಡಲೇ ಬಸ್‌ಗಳ ನಿಲುಗಡೆಗೆ ಹಾಗೂ ಸಮರ್ಪಕ ಬಸ್‌ ಸೌಲಭ್ಯ ಕಲ್ಪಿಸಲು ಆಗ್ರಹಿಸಿ ವಿದ್ಯಾರ್ಥಿಗಳು ಹಾಗೂ ಗ್ರಾಮಸ್ಥರು, ಈ ಮಾರ್ಗದ ಎಲ್ಲಾ ಕೆಎಸ್‌ಆರ್‌ಟಿಸಿ ಬಸ್‌ಗಳನ್ನು ತಡೆದು ಪ್ರತಿಭಟನೆ ನಡೆಸಿದರು.

ಇದನ್ನೂ ಓದಿ: Karnataka Rain : ಭಾರಿ ಮಳೆಗೆ ಮರ ಬಿದ್ದು ಮೇಕೆಗಳು ಸಾವು; ಸಿಡಿಲಿಗೆ ಎಲೆಕ್ಟ್ರಿಕ್‌ ಅಂಗಡಿ ಸುಟ್ಟು ಭಸ್ಮ

ಪ್ರತಿನಿತ್ಯ ಗೋವಿನಕೋವಿ ಗ್ರಾಮದಿಂದ ಹೊನ್ನಾಳಿ ಮತ್ತು ಶಿವಮೊಗ್ಗಕ್ಕೆ ನೂರಾರು ವಿದ್ಯಾರ್ಥಿಗಳು ಶಾಲಾ-ಕಾಲೇಜುಗಳಿಗೆ ತೆರಳುತ್ತಾರೆ ಆದರೆ ಸಮರ್ಪಕ ಬಸ್‌ ಸೌಲಭ್ಯವಿಲ್ಲದೇ ಹಾಗೂ ಎಲ್ಲ ಬಸ್‌ಗಳು ತುಂಬಿಬರುವುದರಿಂದ ದಿನನಿತ್ಯವೂ ಬಸ್‌ನಲ್ಲಿ ನಿಂತುಕೊಂಡೇ ಪ್ರಯಾಣಿಸಬೇಕಾಗಿದೆ ಎಂದು ಗ್ರಾಮಸ್ಥರು ಆರೋಪಿಸಿದರು.

ವಿದ್ಯಾರ್ಥಿಗಳು ಸರಿಯಾದ ಸಮಯಕ್ಕೆ ಶಾಲಾ-ಕಾಲೇಜುಗಳಿಗೆ ಹೋಗಲು ಸಾಧ್ಯವಾಗದೇ ತೊಂದರೆ ಅನುಭವಿಸುವಂತಾಗಿದೆ. ಬೆಳಿಗ್ಗೆ ಮತ್ತು ಸಂಜೆ ಸರಿಯಾದ ಸಮಯಕ್ಕೆ ಹೆಚ್ಚುವರಿ ಬಸ್‌ಗಳನ್ನು ಕಲ್ಪಿಸಲು ಕೆಎಸ್‌ಆರ್‌ಟಿಸಿ ಅಧಿಕಾರಿಗಳು ಸೂಕ್ತ ಕ್ರಮ ಕೈಗೊಳ್ಳಬೇಕು ಎಂದು ಪ್ರತಿಭಟನಾಕಾರರು ಒತ್ತಾಯಿಸಿದರು.

ಇದನ್ನೂ ಓದಿ: Gold Rate Today: ಕೈ ಸುಡುತ್ತಿದೆ ಚಿನ್ನದ ಬೆಲೆ; ಆಭರಣ ಖರೀದಿಗೆ ಮುನ್ನ ಬೆಲೆ ಹೆಚ್ಚಳ ಗಮನಿಸಿ

ಪ್ರತಿಭಟನೆಯಲ್ಲಿ ಗೋವಿನಕೋವಿ ಗ್ರಾಮದ ವಿದ್ಯಾರ್ಥಿಗಳು ಹಾಗೂ ಗ್ರಾಮಸ್ಥರು ಪಾಲ್ಗೊಂಡಿದ್ದರು.

Continue Reading

ಬೆಂಗಳೂರು ಗ್ರಾಮಾಂತರ

Food Poisoning : ಇಲಿ ಬಿದ್ದ ಪಲ್ಯ ಸೇವಿಸಿದ ಎಸ್‌ ವ್ಯಾಸ ಕಾಲೇಜು ವಿದ್ಯಾರ್ಥಿಗಳಿಗೆ ವಾಂತಿ

Food Poisoning : ಇಲಿ ಬಿದ್ದ ಪಲ್ಯವನ್ನು ಸೇವಿಸಿದ ಹಾಸ್ಟೆಲ್‌ ವಿದ್ಯಾರ್ಥಿಗಳಿಗೆ ವಾಂತಿ ಕಾಣಿಸಿಕೊಂಡಿದೆ. ಇಲಿ ಕಂಡು ಬೆಚ್ಚಿ ಬಿದ್ದ ವಿದ್ಯಾರ್ಥಿಗಳು ತರಗತಿ ಬಹಿಷ್ಕರಿಸಿ ಪ್ರತಿಭಟಿಸಿದರು.

VISTARANEWS.COM


on

By

Food Poisoning
Koo

ಆನೇಕಲ್: ಇಲಿ ಬಿದ್ದ ಪಲ್ಯ ಸೇವಿಸಿದ ಕಾಲೇಜು ವಿದ್ಯಾರ್ಥಿಗಳು (Food Poisoning)ಅಸ್ವಸ್ಥಗೊಂಡಿದ್ದಾರೆ. ಬೆಂಗಳೂರು ಹೊರವಲಯ ಜಿಗಣಿ ಸಮೀಪದ ಎಸ್.ವ್ಯಾಸ ಯೂನಿವರ್ಸಿಟಿಯಲ್ಲಿ ಘಟನೆ ನಡೆದಿದೆ.

ರಾತ್ರಿ ಕಾಲೇಜು ಹಾಸ್ಟೆಲ್‌ನಲ್ಲಿ ಎಲ್ಲ ವಿದ್ಯಾರ್ಥಿಗಳು ಊಟ ತಿಂದಿದ್ದಾರೆ. ಪಲ್ಯ ತಿಂದ ಸ್ವಲ್ಪ ಸಮಯದಲ್ಲೇ ಕೆಲ ವಿದ್ಯಾರ್ಥಿಗಳಿಗೆ ವಾಂತಿಯಾಗಿದೆ. ಈ ವೇಳೆ ಅನುಮಾನಗೊಂಡು ಪರಿಶೀಲಿಸಿದಾಗ ಸತ್ತ ಇಲಿ ಪ್ರತ್ಯಕ್ಷವಾಗಿದೆ. ಪಲ್ಯದಲ್ಲಿ ಇಲಿ ಬಿದ್ದಿರುವುದು ಕಂಡು ವಿದ್ಯಾರ್ಥಿಗಳು ಬೆಚ್ಚಿಬಿದ್ದಿದ್ದಾರೆ.

ವಿದ್ಯಾರ್ಥಿಗಳ ಆರೋಗ್ಯದ ಬಗ್ಗೆ ಗಮ‌ನ ನೀಡದೆ ಬೇಜವಾಬ್ದಾರಿತನದಿಂದ ವರ್ತಿಸಿದ್ದಕ್ಕೆ ಕಾಲೇಜು ಆಡಳಿತ ಮಂಡಳಿ ವಿರುದ್ಧ ಪ್ರತಿಭಟನೆ ನಡೆಸಿದರು. ಬಳಿಕ ವಿದ್ಯಾರ್ಥಿಗಳ ಮನವೊಲಿಸಿದ ಕಾಲೇಜು ಆಡಳಿತ ಮಂಡಳಿ ಇನ್ಮುಂದೆ ಈ ರೀತಿಯ ತಪ್ಪುಗಳ ಆಗದಂತೆ ನೋಡಿಕೊಳ್ಳುವುದಾಗಿ ಹೇಳಿತ್ತು. ಹೀಗಾಗಿ ಪ್ರತಿಭಟನೆ ಕೈಬಿಟ್ಟು ತರಗತಿಗೆ ಹಾಜರಾದರು.

ಇದನ್ನೂ ಓದಿ: Physical Abuse : ಕಾಂಪೌಂಡ್‌ ಹಾರಿ ಬಂದ ಪುರಸಭೆ ಅಧ್ಯಕ್ಷೆಯ ಗಂಡನಿಗೆ ಚಳಿ ಬಿಡಿಸಿದ ಮಹಿಳೆಯರು

ಮೈಸೂರಲ್ಲಿ ಗೃಹ ಪ್ರವೇಶದ ಊಟ ತಿಂದ ವೃದ್ಧೆ ಸಾವು; 20ಕ್ಕೂ ಹೆಚ್ಚು ಮಂದಿ ಅಸ್ವಸ್ಥ

ಮೈಸೂರು: ಗೃಹ ಪ್ರವೇಶದಲ್ಲಿ ಊಟ ತಿಂದ ವೃದ್ಧೆಯೊಬ್ಬರು ತೀವ್ರ ಅಸ್ವಸ್ಥಗೊಂಡು (Food Poisoning) ಮೃತಪಟ್ಟಿದ್ದಾರೆ. ಶಿವಮ್ಮ (65) ಮೃತ ದುರ್ದೈವಿ. ಮೈಸೂರಿನ ಮಾರ್ಬಳ್ಳಿಯಲ್ಲಿ ಘಟನೆ ನಡೆದಿದೆ.

ಮಾರ್ಬಳ್ಳಿಯಲ್ಲಿ ಕಳೆದ ಶುಕ್ರವಾರ ಮನೆಯೊಂದರ ಗೃಹ ಪ್ರವೇಶ ಕಾರ್ಯಕ್ರಮವಿತ್ತು. ಈ ಗೃಹ ಪ್ರವೇಶ ಕಾರ್ಯದಲ್ಲಿ ಗ್ರಾಮಸ್ಥರು ಊಟ ಸೇವಿಸಿದ್ದರು. ಊಟದ ಬಳಿಕ ಸುಮಾರು ಮಕ್ಕಳು ಸೇರಿ 20ಕ್ಕೂ ಹೆಚ್ಚು ಮಂದಿಗೆ ವಾಂತಿ, ಭೇದಿ ಶುರುವಾಗಿತ್ತು.

ಇತ್ತ ತೀವ್ರ ಅಸ್ವಸ್ಥಗೊಂಡವರನ್ನು ಮೈಸೂರು ಆಸ್ಪತ್ರೆಗೆ ದಾಖಲು ಮಾಡಲಾಗಿತ್ತು. ಹಲವರಿಗೆ ಗ್ರಾಮದ ಪ್ರಾಥಮಿಕ ಆರೋಗ್ಯ ಕೇಂದ್ರದಲ್ಲೇ ಚಿಕಿತ್ಸೆ ಕೊಡಲಾಗಿದೆ. ಗ್ರಾಮಕ್ಕೆ ಆರೋಗ್ಯಾಧಿಕಾರಿಗಳು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.

ಚಾಮುಂಡೇಶ್ವರಿ ಕ್ಷೇತ್ರದಲ್ಲಿ ಫುಡ್ ಪಾಯ್ಸನ್ ಪ್ರಕರಣಕ್ಕೆ ಟ್ವಿಸ್ಟ್

ಗೃಹ ಪ್ರವೇಶದಲ್ಲಿ ಊಟ ಮಾಡದವರಿಗೂ ವಾಂತಿ ಭೇದಿ ಕಾಣಿಸಿಕೊಂಡಿದೆ ಎನ್ನಲಾಗಿದೆ. ಮೈಸೂರು ತಾಲೂಕಿನ ಮಾರ್ಬಳ್ಳಿ ಗ್ರಾಮದ 50ಕ್ಕೂ ಹೆಚ್ಚು ಜನರಲ್ಲಿ ವಾಂತಿ ಭೇದಿ ಕಾಣಿಸಿಕೊಂಡಿದೆ. 30ಕ್ಕೂ ಹೆಚ್ಚು ಜನರು ಜಿಲ್ಲಾಸ್ಪತ್ರೆಗೆ ದಾಖಲಾಗಿದ್ದಾರೆ. ಕಳೆದ ಶುಕ್ರವಾರ ಗ್ರಾಮದಲ್ಲಿ ನಡೆದಿರುವ ಗೃಹ ಪ್ರವೇಶ ಕಾರ್ಯಕ್ರಮದಲ್ಲಿ ಸುಮಾರು 300ಕ್ಕೂ ಹೆಚ್ಚು ಜನರಿಗೆ ಊಟ ಬಡಿಸಲಾಗಿತ್ತು. ಮಾರ್ಬಳ್ಳಿ ಹೊರತು ಪಡಿಸಿ ಬೇರೆ ಗ್ರಾಮದಿಂದಲ್ಲೂ ಜನರು ಬಂದಿದ್ದರು. ಬೇರೆ ಗ್ರಾಮದ ಯಾರಲ್ಲೂ ಅನಾರೋಗ್ಯ ಕಾಣಿಸಿಕೊಂಡಿಲ್ಲ. ಇದನ್ನು ಹೊರತು ಪಡಿಸಿ ಅದೇ ಗ್ರಾಮದ ಜನರು ಊಟ ಸೇವಿಸದವರಿಗೆ ವಾಂತಿ ಭೇದಿ ಕಾಣಿಸಿಕೊಂಡಿದೆ. ಮೈಸೂರಿನ ಕೆ.ಸಾಲುಂಡಿ, ತಗಡೂರಿನಲ್ಲಿ ಕಾಲರಾ ಪತ್ತೆಯಾಗಿತ್ತು. ಇದೀಗ ಮತ್ತೊಂದು ಗ್ರಾಮದಲ್ಲೂ ಕಾಲರಾ ಏನಾದರೂ ಆವರಿಸಿದ್ಯಾ ಎಂಬ ಆತಂಕ ಹೆಚ್ಚಾಗಿದೆ. ಇಷ್ಟೆಲ್ಲ ನಡೆದರೂ ಆರೋಗ್ಯ ಇಲಾಖೆ‌‌ ಎಚ್ಚೆತ್ತುಕೊಂಡಿಲ್ಲ ಎಂಬ ಆರೋಪ ಕೇಳಿ ಬಂದಿದೆ.

Continue Reading

ಕ್ರೈಂ

Physical Abuse : ಕಾಂಪೌಂಡ್‌ ಹಾರಿ ಬಂದ ಪುರಸಭೆ ಮಾಜಿ ಅಧ್ಯಕ್ಷೆಯ ಗಂಡನಿಗೆ ಚಳಿ ಬಿಡಿಸಿದ ಮಹಿಳೆಯರು

ಮಹಿಳೆಯರಿಗೆ ಲೈಂಗಿಕ ಕಿರುಕುಳ ನೀಡುತ್ತಿದ್ದ ಪುರಸಭೆಯ ಮಾಜಿ ಅಧ್ಯೆಕ್ಷೆಯ ಪತಿಯನ್ನು ಹಿಡಿದು ಥಳಿಸಿದ್ದಾರೆ. ಕಾಂಪೌಂಡ್‌ ಹಾರಿ ಮನೆಯೊಳಗೆ ಬಂದು ಅಸಭ್ಯವಾಗಿ ವರ್ತಿಸುತ್ತಿದ್ದ ಎನ್ನಲಾಗಿದೆ.

VISTARANEWS.COM


on

By

Physical Abuse in Gadaga
Koo

ಗದಗ: ಲೈಂಗಿಕ ಕಿರುಕುಳ (Physical Abuse) ಕೊಟ್ಟ ಪುರಸಭೆ ಮಾಜಿ ಅಧ್ಯಕ್ಷೆಯ‌ ಪತಿಗೆ ಮಹಿಳೆಯರು ಹಿಡಿದು ಥಳಿಸಿರುವ ಘಟನೆ ಗದಗ ಜಿಲ್ಲೆಯ ಮುಂಡರಗಿ ಪಟ್ಟಣದಲ್ಲಿ ನಡೆದಿದೆ. ಪುರಸಭೆ ಮಾಜಿ ಅಧ್ಯಕ್ಷೆ ಕವಿತಾ ಉಳ್ಳಾಗಡ್ಡಿ ಅವರ ಪತಿ ಅಂದಪ್ಪ ಉಳ್ಳಾಗಡ್ಡಿ ಧರ್ಮದೇಟು ತಿಂದವನು.

ಮುಂಡರಗಿಯಲ್ಲಿದ್ದ ಕುಟುಂಬವೊಂದರ ಸಹೋದರಿಯರಿಗೆ, ಅಂದಪ್ಪ ಉಳ್ಳಾಗಡ್ಡಿ ಲೈಂಗಿಕ ಕಿರುಕುಳ ನೀಡುತ್ತಿದ್ದ ಎನ್ನಲಾಗಿದೆ. ಈತನ ಕಾಟಕ್ಕೆ ತಿರುಗಿದ್ದ ಬಿದ್ದ ಮಹಿಳೆಯರು ಮನೆಗೆ ಬರುವಂತೆ ಹೇಳಿದ್ದರು. ಈ ವೇಳೆ ಕಾಂಪೌಂಡ್‌ ಹಾರಿ ಮನೆಯೊಳಗೆ ಬಂದವನಿಗೆ ಚಳಿ ಬಿಡಿಸಿದ್ದಾರೆ. ತಾನೇನು ಮಾಡಿಲ್ಲ, ಸುಖಾಸುಮ್ಮನೆ ಆರೋಪ ಮಾಡಲಾಗುತ್ತಿದೆ ಎಂದಾಗ ಸಹೋದರಿಯರು ಕಪಾಳಮೋಕ್ಷ ಮಾಡಿ ಥಳಿಸಿದ್ದಾರೆ.

ಇದನ್ನೂ ಓದಿ: Karnataka Rain : ಭಾರಿ ಮಳೆಗೆ ಮರ ಬಿದ್ದು ಮೇಕೆಗಳು ಸಾವು; ಸಿಡಿಲಿಗೆ ಎಲೆಕ್ಟ್ರಿಕ್‌ ಅಂಗಡಿ ಸುಟ್ಟು ಭಸ್ಮ

ಮಕ್ಕಳ ಎದುರೇ ತಂದೆಯನ್ನು ಗುಂಡಿಕ್ಕಿ ಕೊಂದ ದುಷ್ಕರ್ಮಿಗಳು

ಮೀರತ್: ಮೂವರು ಚಿಕ್ಕ ಮಕ್ಕಳ ಎದುರೇ ತಂದೆಯನ್ನು ಗುಂಡಿಕ್ಕಿ ಹತ್ಯೆ (murder) ಮಾಡಿರುವ ಘಟನೆ ಉತ್ತರ ಪ್ರದೇಶದ (uttarpradesh) ಮೀರತ್‌ನ (Meerut) ಕ್ಲಬ್‌ನಲ್ಲಿ ಮಂಗಳವಾರ ರಾತ್ರಿ ನಡೆದಿದೆ. ಮೀರತ್‌ನ ಜೈದಿ ಫಾರ್ಮ್‌ನ ನಿವಾಸಿ ಅರ್ಷದ್ (25) ಹತ್ಯೆಯಾದ ವ್ಯಕ್ತಿ. ಅವರು ತಮ್ಮ ಇಬ್ಬರು ಹೆಣ್ಣುಮಕ್ಕಳು ಮತ್ತು ಮಗನೊಂದಿಗೆ ಮೀರತ್‌ನ ಕ್ಲಬ್‌ಗೆ ಬಂದಿದ್ದಾಗ ಈ ಘಟನೆ ನಡೆದಿದೆ.

ಉತ್ತರ ಪ್ರದೇಶದ ಮೀರತ್‌ನ ಲೋಹಿಯಾ ನಗರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದ ಈ ಘಟನೆಯ ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ ಭಾರೀ ವೈರಲ್ (Viral Video) ಆಗಿದೆ. ಅರ್ಷದ್ ಮಂಗಳವಾರ ರಾತ್ರಿ ಮಕ್ಕಳೊಂದಿಗೆ ಭದಾನದಲ್ಲಿರುವ ಕ್ಲಬ್‌ನ ಈಜುಕೊಳಕ್ಕೆ ತೆರಳಿದ್ದರು. ಜನರಿಂದ ತುಂಬಿದ್ದ ಕ್ಲಬ್‌ನಲ್ಲಿ ಅರ್ಷದ್ ಒಬ್ಬ ವ್ಯಕ್ತಿಯೊಂದಿಗೆ ಮಾತನಾಡುತ್ತಿದ್ದಾಗಲೇ ಈ ಘಟನೆ ನಡೆದಿದೆ. ಈ ಘಟನೆ ಸಿಸಿಟಿವಿ ಕೆಮರಾದಲ್ಲಿ ಸೆರೆಯಾಗಿದೆ. ಅರ್ಷದ್ ತನ್ನ ಫೋನ್ ಅನ್ನು ನೋಡುತ್ತಿದ್ದಂತೆ ಒಬ್ಬ ವ್ಯಕ್ತಿ ಅವರನ್ನು ಜನರ ಗುಂಪಿನಿಂದ ಪ್ರತ್ಯೇಕಿಸಲು ಪ್ರಯತ್ನಿಸುತ್ತಾನೆ. ಕೂಡಲೇ ಅವರ ಮೇಲೆ ಗುಂಡಿನ ದಾಳಿ ನಡೆದಿದೆ. ನೆಲಕ್ಕೆ ಬಿದ್ದ ಅವರತ್ತ ಮಕ್ಕಳು ಅಳುತ್ತಾ ಓಡಿ ಬಂದಿರುವುದು ವಿಡಿಯೋದಲ್ಲಿ ಸೆರೆಯಾಗಿದೆ.

ಮಾಹಿತಿ ಪಡೆದ ಪೊಲೀಸರು ಸ್ಥಳಕ್ಕಾಗಮಿಸಿ ಗಾಯಾಳುವನ್ನು ಸ್ಥಳೀಯ ಖಾಸಗಿ ಆಸ್ಪತ್ರೆಗೆ ದಾಖಲಿಸಿದ್ದು, ವೈದ್ಯರು ಮೃತಪಟ್ಟಿರುವುದಾಗಿ ಘೋಷಿಸಿದ್ದಾರೆ. ಮೃತದೇಹವನ್ನು ಮರಣೋತ್ತರ ಪರೀಕ್ಷೆಗೆ ಕಳುಹಿಸಲಾಗಿದೆ ಎಂದು ನಗರ ಪೊಲೀಸ್ ವರಿಷ್ಠಾಧಿಕಾರಿ ಆಯುಷ್ ವಿಕ್ರಮ್ ತಿಳಿಸಿದ್ದಾರೆ.

ಆರೋಪಿಗಳು ಅರ್ಷದ್ ಅವರ ತಲೆಗೆ ಅತಿ ಸಮೀಪದಿಂದ ಪಾಯಿಂಟ್ ಬ್ಲಾಂಕ್ ರೇಂಜ್‌ ನಲ್ಲಿ ಗುಂಡು ಹಾರಿಸಿ ಸ್ಥಳದಿಂದ ಪರಾರಿಯಾಗಿದ್ದಾರೆ. ಹಳೆ ವೈಷಮ್ಯವೇ ಘಟನೆಗೆ ಕಾರಣ ಎನ್ನಲಾಗಿದೆ.


ಕೆಲವು ದಿನಗಳ ಹಿಂದೆ ಹಣದ ವಿಚಾರವಾಗಿ ಬಿಲಾಲ್ ಮತ್ತು ಅರ್ಷದ್ ನಡುವೆ ತೀವ್ರ ಜಗಳವಾಗಿತ್ತು. ಇಬ್ಬರ ವಿರುದ್ಧವೂ ಹಲವು ಕ್ರಿಮಿನಲ್ ಮೊಕದ್ದಮೆಗಳು ದಾಖಲಾಗಿವೆ. ಅರ್ಷದ್ ಕುಟುಂಬದ ದೂರಿನ ಮೇರೆಗೆ ಬಿಲಾಲ್ ವಿರುದ್ಧ ಪ್ರಕರಣ ದಾಖಲಾಗಿದೆ. ಆತನ ಬಂಧನಕ್ಕೆ ತಂಡ ರಚಿಸಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ.

ಈ ಸಂಗತಿಯ ಕುರಿತು ನಿಮ್ಮ ಅನಿಸಿಕೆ ಏನು? ಕಾಮೆಂಟ್ ಮೂಲಕ ತಿಳಿಸಿ

Continue Reading
Advertisement
Valmiki corporation Scam
ಕರ್ನಾಟಕ9 mins ago

Valmiki Corporation Scam: ಸಚಿವ ನಾಗೇಂದ್ರ ಇಂದೇ ರಾಜೀನಾಮೆ: ಖಚಿತಪಡಿಸಿದ ಡಿಸಿಎಂ ಡಿಕೆಶಿ

Protest demanding adequate bus facility at govinakovi village
ದಾವಣಗೆರೆ13 mins ago

Davanagere News: ಸಮರ್ಪಕ ಬಸ್‌ ಸೌಲಭ್ಯಕ್ಕೆ ಆಗ್ರಹಿಸಿ ಹೊನ್ನಾಳಿಯ ಗೋವಿನಕೋವಿ ಗ್ರಾಮಸ್ಥರ ಪ್ರತಿಭಟನೆ

Food Poisoning
ಬೆಂಗಳೂರು ಗ್ರಾಮಾಂತರ15 mins ago

Food Poisoning : ಇಲಿ ಬಿದ್ದ ಪಲ್ಯ ಸೇವಿಸಿದ ಎಸ್‌ ವ್ಯಾಸ ಕಾಲೇಜು ವಿದ್ಯಾರ್ಥಿಗಳಿಗೆ ವಾಂತಿ

Narendra Modi
ದೇಶ29 mins ago

Narendra Modi: ನರೇಂದ್ರ ಮೋದಿ ಪ್ರಮಾಣವಚನ ಕಾರ್ಯಕ್ರಮ ದಿಢೀರ್‌ ಮುಂದೂಡಿಕೆ?

Kannada New Movie sahara movie release tomorrow
ಸ್ಯಾಂಡಲ್ ವುಡ್34 mins ago

Kannada New Movie: ನಾಳೆಯಿಂದ ʻಸಹಾರಾʼ ಆಟ ಶುರು; ಕನ್ನಡದ ಮೊದಲ ಮಹಿಳಾ ಕ್ರಿಕೆಟ್ ಕಥೆಯಾಧಾರಿತ ಸಿನಿಮಾ!

Physical Abuse in Gadaga
ಕ್ರೈಂ39 mins ago

Physical Abuse : ಕಾಂಪೌಂಡ್‌ ಹಾರಿ ಬಂದ ಪುರಸಭೆ ಮಾಜಿ ಅಧ್ಯಕ್ಷೆಯ ಗಂಡನಿಗೆ ಚಳಿ ಬಿಡಿಸಿದ ಮಹಿಳೆಯರು

Environment awareness programme by NCC team in Bengaluru
ಬೆಂಗಳೂರು47 mins ago

World Environment Day: ಬೆಂಗಳೂರಿನಲ್ಲಿ ಎನ್‌ಸಿಸಿ ತಂಡದಿಂದ ವಿಶೇಷ ಪರಿಸರ ಜಾಗೃತಿ ಕಾರ್ಯಕ್ರಮ

SIT feels it would be better for Minister Nagendra to resign
ಕರ್ನಾಟಕ52 mins ago

Valmiki Corporation Scam: ಸಚಿವ ನಾಗೇಂದ್ರ ರಾಜೀನಾಮೆ ಪಡೆಯುವುದು ಉತ್ತಮ; ಸರ್ಕಾರಕ್ಕೆ ಅಭಿಪ್ರಾಯ ತಿಳಿಸಿದ ಎಸ್‌ಐಟಿ?

Encounter in UP
ದೇಶ59 mins ago

Encounter in UP: ಮೋಸ್ಟ್‌ ವಾಂಟೆಡ್‌ ಗ್ಯಾಂಗ್‌ಸ್ಟರ್‌ ಎನ್‌ಕೌಂಟರ್‌ಗೆ ಬಲಿ! ಯೋಗಿ ನಾಡಿನಲ್ಲಿ ಮತ್ತೆ ಗುಂಡಿನ ಸದ್ದು

Pradeep Eshwar
ಪ್ರಮುಖ ಸುದ್ದಿ1 hour ago

Pradeep Eshwar: ಪ್ರದೀಪ್‌ ಈಶ್ವರ್‌ ರಾಜೀನಾಮೆಗೆ ಒತ್ತಾಯಿಸಿದ ಕಾಂಗ್ರೆಸ್‌ ನಾಯಕ ಪಕ್ಷದಿಂದಲೇ ಉಚ್ಚಾಟನೆ!

Sharmitha Gowda in bikini
ಕಿರುತೆರೆ8 months ago

Geetha Serial Kannada: ನಿದ್ದೆ ಕದ್ದ ಚೋರಿ! ನಟಿ `ಭಾನುಮತಿ’ ಹಾಟ್‌ ಪೋಟೊಗಳಿಗೆ ಫ್ಯಾನ್ಸ್ ಫುಲ್ ಫಿದಾ

Kannada Serials
ಕಿರುತೆರೆ8 months ago

Kannada Serials TRP: 2ನೇ ಸ್ಥಾನದಲ್ಲಿ 2 ಧಾರಾವಾಹಿಗಳು; ಟಿಆರ್‌ಪಿ ರೇಸ್‌ನಲ್ಲಿಲ್ಲ ಭಾಗ್ಯಲಕ್ಷ್ಮೀ!

Bigg Boss- Saregamapa 20 average TRP
ಕಿರುತೆರೆ8 months ago

Kannada Serials TRP: ಏಳನೇ ಸ್ಥಾನಕ್ಕೆ ʻಅಮೃತಧಾರೆʼ ಕುಸಿತ; ಬಿಗ್‌ ಬಾಸ್‌-ಸರಿಗಮಪ ಟಿಆರ್‌ಪಿ ಎಷ್ಟು?

galipata neetu
ಕಿರುತೆರೆ6 months ago

Kanyadana Serial: ಕಿರುತೆರೆಗೆ ಮತ್ತೆ ಎಂಟ್ರಿ ಕೊಟ್ಟ ʻಗಾಳಿಪಟʼ ಖ್ಯಾತಿಯ ʻನೀತುʼ!

Kannada Serials
ಕಿರುತೆರೆ8 months ago

Kannada Serials TRP: ನಾಲ್ಕನೇ ಸ್ಥಾನಕ್ಕೆ ಕುಸಿತ ಕಂಡ ʻಸೀತಾ ರಾಮʼ; ಟಿಆರ್‌ಪಿ ರೇಸ್‌ಗೆ ʻಭಾಗ್ಯಲಕ್ಷ್ಮಿʼ ಬ್ಯಾಕ್‌!

Kannada Serials
ಕಿರುತೆರೆ8 months ago

Kannada Serials TRP: ಟಿಆರ್‌ಪಿಯಲ್ಲಿ ʻಭಾಗ್ಯಲಕ್ಷ್ಮೀʼ ಹವಾ; ʻಪುಟ್ಟಕ್ಕನ ಮಕ್ಕಳುʼ ಧಾರಾವಾಹಿಗೆ ಸಂಕಷ್ಟ!

Bigg Boss' dominates TRP; Sita Rama fell to the sixth position
ಕಿರುತೆರೆ7 months ago

Kannada Serials TRP: ಟಿಆರ್‌ಪಿಯಲ್ಲಿ ʻಬಿಗ್ ಬಾಸ್ʼದೇ ಮೇಲುಗೈ; 6ನೇ ಸ್ಥಾನಕ್ಕೆ ಕುಸಿದ ʻಸೀತಾ ರಾಮʼ

geetha serial Dhanush gowda engagement
ಕಿರುತೆರೆ6 months ago

Dhanush Gowda: ಗೀತಾ ಧಾರಾವಾಹಿ ನಟನ ನಿಶ್ಚಿತಾರ್ಥ; ಭವ್ಯಾಳ ಕಮೆಂಟ್‌ ಬಾಕ್ಸ್‌ ಆಫ್‌!

varun
ಕಿರುತೆರೆ7 months ago

Brindavana Serial: ʼಬೃಂದಾವನʼ ಧಾರಾವಾಹಿಯಲ್ಲಿ ದೊಡ್ಡ ಟ್ವಿಸ್ಟ್‌; ಪ್ರಮುಖ ಪಾತ್ರಧಾರಿಯೇ ಬದಲು

Kannada Serials
ಕಿರುತೆರೆ9 months ago

Kannada Serials TRP: ಟಿಆರ್‌ಪಿಯಲ್ಲಿ ಏರಿಕೆ ಕಂಡ ʻಅಮೃತಧಾರೆʼ; ʻಗಟ್ಟಿಮೇಳʼಕ್ಕೆ ನಾಲ್ಕನೇ ಸ್ಥಾನ!

Karnataka Rain
ಮಳೆ1 hour ago

Karnataka Rain : ಭಾರಿ ಮಳೆಗೆ ಮರ ಬಿದ್ದು ಮೇಕೆಗಳು ಸಾವು; ಸಿಡಿಲಿಗೆ ಎಲೆಕ್ಟ್ರಿಕ್‌ ಅಂಗಡಿ ಸುಟ್ಟು ಭಸ್ಮ

Lok Sabha Election Result 2024 Live
ದೇಶ2 days ago

Lok Sabha Election Result 2024 Live: ಲೋಕಸಭೆ ಚುನಾವಣೆ ಫಲಿತಾಂಶದ ಲೈವ್‌ ಇಲ್ಲಿ ವೀಕ್ಷಿಸಿ

Karnataka Rain
ಮಳೆ3 days ago

Karnataka Rain : 133 ವರ್ಷದ ರೆಕಾರ್ಡ್ ಬ್ರೇಕ್ ಮಾಡಿದ ʻಬೆಂಗಳೂರು ಮಳೆʼ

Snake Rescue Snakes spotted in heavy rain
ಮಳೆ3 days ago

Snake Rescue: ಮಳೆ ನೀರಿನಲ್ಲಿ ಹರಿದು ಬಂದು ಬೈಕ್‌ನಲ್ಲಿ ಸೇರಿಕೊಂಡ ಹಾವು; ಮನೆಗಳಲ್ಲೂ ಪ್ರತ್ಯಕ್ಷ

Karnataka Rain
ಮಳೆ4 days ago

Karnataka Rain : ವೀಕೆಂಡ್‌ ಮೋಜಿಗೆ ವರುಣ ಅಡ್ಡಿ; ಭಾನುವಾರ ಸಂಜೆಗೆ ಮಳೆ ಕಾಟ

Liquor ban
ಬೆಂಗಳೂರು5 days ago

Liquor Ban : ಮುಂದಿನ ಏಳು ದಿನಗಳಲ್ಲಿ ನಾಲ್ಕೂವರೆ ದಿನ ಬಾರ್ ಕ್ಲೋಸ್; ಎಣ್ಣೆ ಸಿಗೋದು ಯಾವ ದಿನ?

Assault Case in Shivamogga
ಕ್ರೈಂ1 week ago

Assault Case : ಶಿವಮೊಗ್ಗದಲ್ಲಿ ಮತ್ತೆ ಬಾಲ ಬಿಚ್ಚಿದ ಪುಂಡರು; ಗಾಂಜಾ ನಶೆಯಲ್ಲಿ ವಾಹನಗಳು ಪೀಸ್‌ ಪೀಸ್‌

Karnataka weather Forecast
ಮಳೆ1 week ago

Karnataka Weather : ಚಿಕ್ಕಮಗಳೂರಲ್ಲಿ ಭಾರಿ ಮಳೆ; ಯಾದಗಿರಿಯಲ್ಲಿ ಕರೆಂಟ್‌ ಕಟ್‌, ಜನರೇಟರ್‌ನಿಂದ ಮೊಬೈಲ್‌ಗಳಿಗೆ ಚಾರ್ಜಿಂಗ್‌!

tumkur murder
ತುಮಕೂರು1 week ago

Tumkur Murder : ಮಗುವಿನ ಮುಂದೆಯೇ ಹೆಂಡತಿಯ ಕತ್ತು, ದೇಹವನ್ನು ಕತ್ತರಿಸಿ ಬಿಸಾಡಿದ ದುಷ್ಟ

Karnataka Weather Forecast
ಮಳೆ1 week ago

Karnataka Weather : ಕಡಲತೀರದಲ್ಲಿ ಅಲೆಗಳ ಅಬ್ಬರ, ಪ್ರವಾಸಿಗರಿಗೆ ಕಟ್ಟೆಚ್ಚರ; ನಾಳೆಯೂ ಗಾಳಿ ಸಹಿತ ಮಳೆ ಅಬ್ಬರ

ಟ್ರೆಂಡಿಂಗ್‌