rashtriya raksha university invites applications for various courses In ShivamoggaRashtriya Raksha University: ರಾಷ್ಟ್ರೀಯ ರಕ್ಷಾ ವಿಶ್ವವಿದ್ಯಾಲಯದ ವಿವಿಧ ಕೋರ್ಸ್‌ಗಳಿಗೆ ಅರ್ಜಿ ಆಹ್ವಾನ - Vistara News

ಕರ್ನಾಟಕ

Rashtriya Raksha University: ರಾಷ್ಟ್ರೀಯ ರಕ್ಷಾ ವಿಶ್ವವಿದ್ಯಾಲಯದ ವಿವಿಧ ಕೋರ್ಸ್‌ಗಳಿಗೆ ಅರ್ಜಿ ಆಹ್ವಾನ

Rashtriya Raksha University: ಶಿವಮೊಗ್ಗದಲ್ಲಿ ರಾಷ್ಟ್ರೀಯ ರಕ್ಷಾ ವಿಶ್ವವಿದ್ಯಾಲಯದ ಮತ್ತೊಂದು ಕ್ಯಾಂಪಸ್‌ ಆರಂಭವಾಗುತ್ತಿದೆ. ಪೊಲೀಸಿಂಗ್, ಆಂತರಿಕ ಭದ್ರತೆಗೆ ಹೆಚ್ಚಿನ ಒತ್ತು ನೀಡುವ ವಿವಿಧ ಕೋರ್ಸ್‌ಗಳು ಇಲ್ಲಿವೆ.

VISTARANEWS.COM


on

RRU Assistant Professor Divyashree
ಮಹತ್ವದ, ಕುತೂಹಲಕರ ಸುದ್ದಿಗಾಗಿ ಫಾಲೊ ಮಾಡಿ
Koo

ಶಿವಮೊಗ್ಗ: ಕೇಂದ್ರ ಸರ್ಕಾರದ ಅಧೀನದಲ್ಲಿರುವ ರಾಷ್ಟ್ರೀಯ ರಕ್ಷಾ ವಿಶ್ವವಿದ್ಯಾಲಯದ ಮತ್ತೊಂದು ಕ್ಯಾಂಪಸ್‌ ಶಿವಮೊಗ್ಗದಲ್ಲಿ ಈ ವರ್ಷದಿಂದ ಆರಂಭವಾಗುತ್ತಿದೆ. ಪೊಲೀಸಿಂಗ್ ಮತ್ತು ಆಂತರಿಕ ಭದ್ರತೆಗೆ ಹೆಚ್ಚಿನ ಒತ್ತು ನೀಡುವ ವಿಷಯಗಳನ್ನು ಈ ವಿಶ್ವವಿದ್ಯಾಲಯ (Rashtriya Raksha University) ಒಳಗೊಂಡಿದ್ದು, ವಿವಿಧ ಕೋರ್ಸ್‌ಗಳ ಪ್ರವೇಶಾತಿಗೆ ಅರ್ಜಿ ಆಹ್ವಾನಿಸಲಾಗಿದೆ.

ಈ ಬಗ್ಗೆ ವಿವಿಯ ಶಿವಮೊಗ್ಗ ಕ್ಯಾಂಪಸ್‌ನ ಕ್ರಿಮಿನಾಲಜಿ ವಿಭಾಗದ ಸಹಾಯಕ ಪ್ರಾಧ್ಯಾಪಕಿ ದಿವ್ಯಶ್ರೀ ಅವರು ಸುದ್ದಿಗೋಷ್ಠಿಯಲ್ಲಿ ಮಾಹಿತಿ ನೀಡಿದ್ದು, ಶಿವಮೊಗ್ಗದ ರಾಗಿಗುಡ್ಡದಲ್ಲಿರುವ ಕೇಂದ್ರೀಯ ವಿದ್ಯಾಲಯದ ಹಳೆಯ ಕಟ್ಟಡದಲ್ಲಿ ರಾಷ್ಟ್ರೀಯ ರಕ್ಷಾ ವಿಶ್ವವಿದ್ಯಾಲಯ ಆರಂಭಿಸಲಾಗುತ್ತಿದೆ. ಈಗಾಗಲೇ ವಿವಿಧ ಕೋರ್ಸ್‌ಗಳಿಗೆ ಅರ್ಜಿ ಆಹ್ವಾನಿಸಲಾಗಿದ್ದು, ಆಸಕ್ತರು ಇದರ ಪ್ರಯೋಜನ ಪಡೆಯಬೇಕು ತಿಳಿಸಿದ್ದಾರೆ.

ಇದನ್ನೂ ಓದಿ | DRDO Recruitment 2023 : ಎಂಜಿನಿಯರಿಂಗ್‌ ಮುಗಿಯಿತಾ? ಡಿಆರ್‌ಡಿಒನಲ್ಲಿ ಸೈಂಟಿಸ್ಟ್‌ ಆಗಿ!

ರಕ್ಷಣಾ ವಿಷಯಕ್ಕೆ ಸಂಬಂಧಿಸಿದ ಶಿಕ್ಷಣವನ್ನು ಕೊಡುವ ಏಕೈಕ ವಿಶ್ವವಿದ್ಯಾಲಯ ಆರ್‌ಆರ್‌ಯು (Rashtriya Raksha University) ಆಗಿದೆ. ಪೊಲೀಸ್ ಸೈನ್ಸ್, ಕಾನೂನು, ವಿಧಿವಿಜ್ಞಾನ, ಡಿಫೆನ್ಸ್ ಮತ್ತು ಅದರ ಅಧ್ಯಯನ, ಕ್ರಿಮಿನಾಲಜಿ (ಅಪರಾಧಶಾಸ್ತ್ರ), ಸೈಬರ್, ಫೊರೆನ್ಸಿಕ್, ಮಾಹಿತಿ ತಂತ್ರಜ್ಞಾನ, ಸೈಬರ್ ಸೆಕ್ಯುರಿಟಿ ಮುಂತಾದ ವಿಷಯಗಳಲ್ಲಿ ಪದವಿ ಮತ್ತು ಉನ್ನತ ಶಿಕ್ಷಣ ಪಡೆಯಲು ಅವಕಾಶವಿದೆ. ಸಂಶೋಧನೆ ನಡೆಸುವವರಿಗೂ ಇದು ಉಪಯೋಗಕಾರಿಯಾಗಿದೆ ಎಂದು ಹೇಳಿದರು.

ವಿವಿಯು ಸ್ಕಾಲರ್‌ಶಿಪ್, ಉದ್ಯೋಗ, ಹಣಕಾಸು ನೆರವನ್ನು ವಿದ್ಯಾರ್ಥಿಗಳಿಗೆ ಒದಗಿಸುತ್ತದೆ. ಪಿಯು ಪಾಸಾದವರಿಗೆ ಒಂದು ವರ್ಷದ ಡಿಪ್ಲೊಮಾ ಕೋರ್ಸ್‌ ಲಭ್ಯವಿದೆ. ಜತೆಗೆ 4 ವರ್ಷಗಳ ಸೆಕ್ಯುರಿಟಿ ಮ್ಯಾನೇಜ್‌ಮೆಂಟ್ ಪದವಿ ಪಡೆಯಲು ಅವಕಾಶವಿದೆ. ಪದವಿ ಪೂರೈಸಿದವರಿಗೆ ಒಂದು ವರ್ಷದ ಪೊಲೀಸ್ ಸೈನ್ಸ್ ಮ್ಯಾನೇಜ್‌ಮೆಂಟ್ ಅಧ್ಯಯನಕ್ಕೆ ಅವಕಾಶವಿದೆ. ಇದರ ಹೊರತಾಗಿ ಪಿಯು ಪಾಸಾದವರಿಗೆ ಕಾರ್ಪೊರೇಟ್ ಸೆಕ್ಯುರಿಟಿ ಮ್ಯಾನೇಜ್‌ಮೆಂಟ್, ಕೋಸ್ಟಲ್ ಸೆಕ್ಯುರಿಟಿ ಮತ್ತು ಲಾ ಎನ್‌ಫೋರ್ಸ್ಮೆಂಟ್, ಫಿಸಿಕಲ್ ಫಿಟ್ ನೆಸ್ ಮ್ಯಾನೇಜ್‌ಮೆಂಟ್ ಮೊದಲಾದ ಸರ್ಟಿಫಿಕೇಟ್ ಕೋರ್ಸ್‌ಗಳನ್ನು ಅಧ್ಯಯನ ಮಾಡುವ ಅವಕಾಶವಿದೆ ಎಂದರು.

ಇದನ್ನೂ ಓದಿ | Govt Employees News : ನೌಕರರ ಸಂಘದ ಪ್ರತಿಭಾ ಪುರಸ್ಕಾರ; ಅರ್ಜಿ ಸಲ್ಲಿಕೆ ಅವಧಿ ವಿಸ್ತರಣೆ

ವಿದ್ಯಾರ್ಥಿಗಳಿಗೆ ಮೆರಿಟ್ ಆಧಾರದಲ್ಲಿ ಪ್ರವೇಶ ನೀಡಲಾಗುವುದು. ಹಾಸ್ಟೆಲ್ ವ್ಯವಸ್ಥೆ ಇರುತ್ತದೆ. ಇಲ್ಲಿ ಅಧ್ಯಯನ ಮಾಡಿದವರಿಗೆ ಪೊಲೀಸ್ ನೇಮಕಾತಿ ಮತ್ತು ರಕ್ಷಣಾ ಇಲಾಖೆಯ ನೇಮಕಾತಿಯಲ್ಲಿ ಹೆಚ್ಚಿನ ಆದ್ಯತೆ ಸಿಗಲಿದೆ. ಉನ್ನತ ದೇಶಭಕ್ತಿ, ಕೌಶಲ್ಯ, ಶಿಸ್ತು, ನೈತಿಕತೆಯನ್ನು ಯುವಕರಲ್ಲಿ ಬೆಳೆಸುವ ಶಿಕ್ಷಣ ಇದಾಗಿದೆ. ಇಲ್ಲಿ ತರಬೇತಿಯನ್ನು ನಿವೃತ್ತ ಮತ್ತು ಹಾಲಿ ಸೇವೆಯಲ್ಲಿರುವ ಉನ್ನತಾಧಿಕಾರಿಗಳಿಂದ ಕೊಡಿಸಲಾಗುವುದು. ಮಾನಸಿಕ ಮತ್ತು ದೈಹಿಕ ಸದೃಢತೆಗೆ ಹೆಚ್ಚಿನ ಒತ್ತು ಕೊಡಲಾಗುವುದು. ಕರ್ನಾಟಕದವರಿಗೆ ಹೆಚ್ಚಿನ ಉದ್ಯೋಗಾವಕಾದ ಸೌಲಭ್ಯ ಇದರಿಂದ ಸಿಗಲಿದೆ ಎಂದರು.

ಸುದ್ದಿಗೋಷ್ಠಿಯಲ್ಲಿ ವಿಶ್ವವಿದ್ಯಾಲಯದ ಆಡಳಿತ ಅಧಿಕಾರಿ ಮಹೇಶ ಕುಸಲಾನಿ, ಶಿವಲಿಂಗಪ್ಪ ಹಾಜರಿದ್ದರು.

ಕ್ಷಣ ಕ್ಷಣದ ಮಾಹಿತಿಗಾಗಿ Vistara News FaceBook ಪೇಜ್ ಫಾಲೋ ಮಾಡಿ
ಮಹತ್ವದ ಮಾಹಿತಿಗಾಗಿ ವಿಸ್ತಾರ ನ್ಯೂಸ್ ಆ್ಯಪ್ ಉಚಿತವಾಗಿ ಡೌನ್ ಲೋಡ್ ಮಾಡಿಕೊಳ್ಳಿ: Andriod App | IOS App
Continue Reading
Click to comment

Leave a Reply

Your email address will not be published. Required fields are marked *

ಬೆಂಗಳೂರು ಗ್ರಾಮಾಂತರ

Murder case : ಬಯಲು ಶೌಚಾಲಯಕ್ಕೆ ಹೋದ ಬಾಲಕನ ದೊಣ್ಣೆಯಿಂದ ಹೊಡೆದು ಕೊಂದರು

Murder case : ಬಯಲು ಶೌಚಾಲಯಕ್ಕೆ ಹೋದ 15 ವರ್ಷದ ಬಾಲಕನ ತಲೆಗೆ ದೊಣ್ಣೆಯಿಂದ ಹೊಡೆದು ಕೊಂದಿದ್ದಾರೆ. ಹಂತಕರ ಪತ್ತೆಗೆ ಪೊಲೀಸರು ಹುಡುಕಾಟ ನಡೆಸುತ್ತಿದ್ದಾರೆ. ಹತ್ಯೆ ಯಾಕಾಗಿ ನಡೆದಿದೆ ಎಂಬುದು ತಿಳಿದು ಬಂದಿಲ್ಲ.

VISTARANEWS.COM


on

By

Murder Case in Anekla
Koo

ಆನೇಕಲ್: ಬಾಲಕನನ್ನು ದೊಣ್ಣೆಯಿಂದ ಹೊಡೆದು ಕೊಲೆ (Murder case) ಮಾಡಲಾಗಿದೆ. ಬೆಂಗಳೂರು ಹೊರವಲಯ ಆನೇಕಲ್ ತಾಲೂಕಿನ ಸರ್ಜಾಪುರ ಸಮೀಪದ ನೆರಿಗಾ ಗ್ರಾಮದಲ್ಲಿ ಘಟನೆ ನಡೆದಿದೆ.

ಬಯಲು ಶೌಚಾಲಯಕ್ಕೆ ಹೋದ ಬಾಲಕ ಶವವಾಗಿ ಪತ್ತೆಯಾಗಿದ್ದಾನೆ. ಕಳೆದ ಮೇ 15ರಂದು ಘಟನೆ ನಡೆದಿದ್ದು, ತಡವಾಗಿ ಬೆಳಕಿಗೆ ಬಂದಿದೆ. ಪ್ರಾಣೇಶ್ (15) ಕೊಲೆಯಾಗಿ ಪ್ರಾಣವನ್ನು ಕಳೆದುಕೊಂಡವನು.

ಪ್ರಾಣೇಶ್‌ ತಂದೆ, ತಾಯಿ ಕಳೆದ ಮೂರು ತಿಂಗಳ ಹಿಂದೆ ಗಾರೆ ಕೆಲಸಕ್ಕೆಂದು ನೆರಿಗಾ ಗ್ರಾಮಕ್ಕೆ ಬಂದು ನೆಲೆಸಿದ್ದರು. ಮೂಲತಃ ಆಂಧ್ರ ಪ್ರದೇಶದ ಕರ್ನೂಲ್ ಜಿಲ್ಲೆಗೆ ಸೇರಿದ ಮಂತ್ರಾಲಯದ ಪ್ರಾಣೇಶ್‌, ಬೇಸಿಗೆ ರಜೆ ಹಿನ್ನೆಲೆಯಲ್ಲಿ ತಂದೆ- ತಾಯಿ ಬಳಿ ಬಂದಿದ್ದ.

ಆದರೆ ಬಯಲು ಶೌಚಾಲಯಕ್ಕೆಂದು ಹೋದವನನ್ನು ಯಾರೋ ಹಂತಕರು ದೊಣ್ಣೆಯಿಂದ ಹೊಡೆದು ಕೊಂದಿದ್ದಾರೆ. ತಲೆ ಹಾಗೂ ಹೊಟ್ಟೆ ಭಾಗಕ್ಕೆ ರಭಸವಾಗಿ ಹೊಡೆದಿರುವುದರಿಂದ ಗಂಭೀರ ಗಾಯಗೊಂಡು ಮೃತಪಟ್ಟಿದ್ದಾನೆ. ಮಗ ಕಾಣೆದೇ ಇದ್ದಾಗ ಹುಡುಕಾಟ ನಡೆಸಿದಾಗ ಆತನ ಮೃತದೇಹವು ಪತ್ತೆಯಾಗಿದೆ.

ಕೂಡಲೇ ಪೋಷಕರು ಪೊಲೀಸರಿಗೆ ಮಾಹಿತಿಯನ್ನು ನೀಡಿದ್ದಾರೆ. ಮೃತದೇಹವನ್ನು ಮರಣೋತ್ತರ ಪರೀಕ್ಷೆಗಾಗಿ ಆಸ್ಪತ್ರೆಗೆ ರವಾನಿಸಿದ್ದು, ವರದಿಗಾಗಿ ಕಾಯುತ್ತಿದ್ದಾರೆ. ಸರ್ಜಾಪುರ ಪೂಲೀಸ್ ಠಾಣೆಯಲ್ಲಿ ಈ ಸಂಬಂಧ ಪ್ರಕರಣ ದಾಖಲಾಗಿದ್ದು, ಪೊಲೀಸರು ತನಿಖೆಯನ್ನು ಮುಂದುವರಿಸಿದ್ದಾರೆ.

ಇದನ್ನೂ ಓದಿ: Physical Abuse: ತೀರ್ಥದಲ್ಲಿ ನಿದ್ದೆ ಮಾತ್ರೆ ಬೆರೆಸಿ ಅರ್ಚಕನಿಂದ ನಿರೂಪಕಿ ಮೇಲೆ ಅತ್ಯಾಚಾರ

ತಂಗಿಯನ್ನು ಬೈಕ್‌ನಲ್ಲಿ ಸುತ್ತಾಡಿಸುತ್ತಿದ್ದವನನ್ನು ಸ್ಕ್ರೂಡ್ರೈವರ್‌ನಿಂದ ಚುಚ್ಚಿ ಕೊಂದ

ಬೆಳಗಾವಿ : ಬೆಳಗಾವಿಯಲ್ಲಿ (Belgavi News) ಹಾಡಹಗಲೇ ಸ್ಕ್ರೂಡ್ರೈವರ್‌ನಿಂದ ಚುಚ್ಚಿ ಯುವಕನ (Murder Case) ಕೊಲೆ ಮಾಡಲಾಗಿತ್ತು. ಬೆಳಗಾವಿ ನಗರದ ಮಹಾಂತೇಶ ನಗರದ ಬ್ರಿಡ್ಜ್‌ ಬಳಿ ಘಟನೆ ನಡೆದಿತ್ತು. ಗಾಂಧಿ ನಗರ ನಿವಾಸಿ ಇಬ್ರಾಹಿಂ ಗೌಸ್ (22) ಮೃತಪಟ್ಟವನು. ಮುಜಮಿಲ್ ಸತ್ತಿಗೇರಿ ಕೊಲೆ ಆರೋಪಿಯಾಗಿದ್ದಾನೆ.

ಇದೇ ಬಡಾವಣೆಯ ಯುವತಿ ಜತೆಗೆ ಇಬ್ರಾಹಿಂ ಪ್ರೀತಿ -ಪ್ರೇಮ ಅಂತ ಓಡಾಡುತ್ತಿದ್ದ . ಗುರುವಾರ ತನ್ನ ಹುಡುಗಿ ಜತೆಗೆ ಇಬ್ರಾಹಿಂ ಬೈಕ್‌ನಲ್ಲಿ ಹೊರಟ್ಟಿದ್ದ. ಇದನ್ನು ನೋಡಿದ ಯುವತಿಯ ಸಹೋದರ ಮುಜಮಿಲ್ ಸತ್ತಿಗೇರಿ ಎಂಬಾತ ಸ್ಕ್ರೂಡ್ರೈವರ್‌ನಿಂದ ಚುಚ್ಚಿದ್ದಾನೆ.

ಕೂಡಲೇ ಅಲ್ಲಿದ್ದ ಸ್ಥಳೀಯರು ಗಾಯಾಳು ಇಬ್ರಾಹಿಂನನ್ನು ಸ್ಥಳೀಯ ಆಸ್ಪತ್ರೆಗೆ ದಾಖಲಿಸಿದ್ದಾರೆ. ಆದರೆ ಇಬ್ರಾಹಿಂ ಚಿಕಿತ್ಸೆ ಫಲಿಸದೇ ಖಾಸಗಿ ಆಸ್ಪತ್ರೆಯಲ್ಲಿ ಮೃತಪಟ್ಟಿದ್ದಾನೆ. ಮಾಳ ಮಾರುತಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ. ಈ ಸಂಬಂಧ ಪ್ರಕರಣ ದಾಖಲಾಗಿದ್ದು ತನಿಖೆಯನ್ನು ನಡೆಸುತ್ತಿದ್ದಾರೆ. ಮರಣೋತ್ತರ ಪರೀಕ್ಷೆ ನಂತರ ಕುಟುಂಬಸ್ಥರಿಗೆ ಮೃತದೇಹ ಹಸ್ತಾಂತರ ಮಾಡಲಾಗಿದೆ.

ಈ ಸಂಗತಿಯ ಕುರಿತು ನಿಮ್ಮ ಅನಿಸಿಕೆ ಏನು? ಕಾಮೆಂಟ್ ಮೂಲಕ ತಿಳಿಸಿ

Continue Reading

ಕ್ರೈಂ

Anjali Murder Case: ಥಳಿಸಿದವರಿಗೆ ಈತ ಅಂಜಲಿ ಹಂತಕ ಎಂದು ಗೊತ್ತೇ ಇರಲಿಲ್ಲ! ಕೊಲೆಗಾರ ಸಿಕ್ಕಿಬಿದ್ದಿದ್ದು ಹೀಗೆ

Anjali Murder Case: ರೈಲಿನಲ್ಲಿ ಮಹಿಳಾ ಪ್ರಯಾಣಿಕರೊಂದಿಗೆ ಅಸಭ್ಯ ರೀತಿಯಲ್ಲಿ ವರ್ತಿಸಿದ್ದಾನೆ. ಈ ಸಂದರ್ಭದಲ್ಲಿ ಪ್ರಯಾಣಿಕರು ಒಟ್ಟು ಸೇರಿ ಈತನನ್ನು ಥಳಿಸಿದ್ದಾರೆ. ಜನರಿಂದ ತಪ್ಪಿಸಿಕೊಳ್ಳಲು ಚಲಿಸುವ ರೈಲಿನಿಂದ ಜಿಗಿದಿದ್ದ. ಆಗ ತೀವ್ರವಾಗಿ ಗಾಯಗೊಂಡಿದ್ದ.

VISTARANEWS.COM


on

anjali murder suspect girish2
Koo

ಹುಬ್ಬಳ್ಳಿ: ಹುಬ್ಬಳ್ಳಿಯ ಬೆಂಡಿಗೇರಿಯಲ್ಲಿ (Hubli Crime) ಅಂಜಲಿಯನ್ನು ಕೊಲೆ (Anjali Murder Case) ಮಾಡಿ ಪರಾರಿಯಾಗಿದ್ದ ಆರೋಪಿ ಗಿರೀಶ್‌ ಸಾವಂತ್ (Anjali Murder suspect) ಬಂಧನ ಪ್ರಕರಣ ಅನಿರೀಕ್ಷಿತ, ರೋಚಕ ರೀತಿಯಲ್ಲಿ ಸಂಭವಿಸಿದೆ. ರೈಲಿನಲ್ಲಿ ಇತರ ಪ್ರಯಾಣಿಕರಿಂದ (Co passengers) ಥಳಿತಕ್ಕೊಳಗಾದ ಗಿರೀಶ್‌, ಕೊಲೆ ಆರೋಪಿ ಎಂದು ಥಳಿಸಿದವರಿಗೆ ಗೊತ್ತೇ ಇರಲಿಲ್ಲ!

ಇದು ನಡೆದದ್ದು ಹೀಗೆ: ಕೊಲೆ ಆರೋಪಿ ಗಿರೀಶ್ ಸಾವಂತ್ ಮೈಸೂರಿನಿಂದ ಹುಬ್ಬಳ್ಳಿಗೆ ರೈಲಿನಲ್ಲಿ ಬರುತ್ತಿದ್ದ. ರೈಲಿನಲ್ಲಿ ಮಹಿಳಾ ಪ್ರಯಾಣಿಕರೊಂದಿಗೆ ಅಸಭ್ಯ ರೀತಿಯಲ್ಲಿ ವರ್ತಿಸಿದ್ದಾನೆ. ಈ ಸಂದರ್ಭದಲ್ಲಿ ಪ್ರಯಾಣಿಕರು ಒಟ್ಟು ಸೇರಿ ಈತನನ್ನು ಥಳಿಸಿದ್ದಾರೆ. ಜನರಿಂದ ತಪ್ಪಿಸಿಕೊಳ್ಳಲು ಚಲಿಸುವ ರೈಲಿನಿಂದ ಜಿಗಿದಿದ್ದ. ಆಗ ತೀವ್ರವಾಗಿ ಗಾಯಗೊಂಡಿದ್ದ.

ಆರೋಪಿಯನ್ನ ದಾವಣಗೆರೆ ಪೊಲೀಸರು ವಶಕ್ಕೆ ಪಡೆದಿದ್ದರು. ಅಂಜಲಿ ಕೊಲೆ ಆರೋಪಿ ಎಂದು ಆರಂಭದಲ್ಲಿ ತಿಳಿದಿರಲಿಲ್ಲ. ಬಳಿಕ ಆರೋಪಿಯ ಗುರುತು ಪತ್ತೆ ಹಚ್ಚಿದ ದಾವಣಗೆರೆ ಪೊಲೀಸರು, ಹುಬ್ಬಳ್ಳಿ ಪೊಲೀಸರಿಗೆ ಮಾಹಿತಿ ನೀಡಿದ್ದಾರೆ. ಬಳಿಕ ಈತನನ್ನು ಹುಬ್ಬಳ್ಳಿ ಪೊಲೀಸರು ವಶಕ್ಕೆ ಪಡೆದು ಹುಬ್ಬಳ್ಳಿಗೆ ಕರೆತಂದು ಕಿಮ್ಸ್ ಆಸ್ಪತ್ರೆಗೆ ದಾಖಲಿಸಿದ್ದಾರೆ. ಹುಬ್ಬಳ್ಳಿ ಧಾರವಾಡ ಪೊಲೀಸ್ ಕಮಿಷನರ್ ರೇಣುಕಾ ಸುಕುಮಾರ ಕಿಮ್ಸ್‌ಗೆ ಆಗಮಿಸಿ ಆರೋಪಿಯನ್ನು ಪರಿಶೀಲಿಸಿದ್ದಾರೆ.

ಎಲ್ಲಿದ್ದ ಗಿರೀಶ್?‌

ಆರೋಪಿ ಗಿರೀಶ್‌ ಮೈಸೂರಿನಲ್ಲಿ ಮಹಾರಾಜ್ ಹೋಟೆಲ್‌ನಲ್ಲಿ ಕೆಲಸ ಮಾಡುತ್ತಿದ್ದ. ಆತ ನೀಡಿದ ಮಾಹಿತಿ ಪ್ರಕಾರ, ಗಿರೀಶ್ ಮತ್ತು ಅಂಜಲಿ ಪರಸ್ಪರ ಪ್ರೀತಿಸುತ್ತಿದ್ದರು. 15 ದಿನಗಳ ಹಿಂದೆ ದೇವಸ್ಥಾನದಲ್ಲಿ ಮದುವೆಯಾಗಿದ್ದರು. ಒಂದು ವಾರದ ಮೊದಲು 2 ಸಾವಿರ ರೂ. ಹಣ ಕೇಳಿದ್ದಳು. ಗಿರೀಶ್‌ ಅದನ್ನು ಫೋನ್ ಪೇ ಮಾಡಿದ್ದ. ಆ ನಂತರ ಗಿರೀಶನ ನಂಬರ್ ಅನ್ನು ಅಂಜಲಿ ಬ್ಲಾಕ್ ಲಿಸ್ಟ್‌ಗೆ ಹಾಕಿದ್ದಳು. ಆತನ ಫೋನ್ ರೀಸಿವ್ ಮಾಡುತ್ತಿರಲಿಲ್ಲ. ಹೀಗಾಗಿ ಸಿಟ್ಟಿಗೆದ್ದ ಗಿರೀಶ್‌ ಮೈಸೂರನಿಂದ ಹುಬ್ಬಳ್ಳಿಗೆ ಬಂದು ನಸುಕಿನ ಜಾವ ಕೊಲೆ ಮಾಡಿದ್ದಾನೆ.

ಕೊಲೆ ನಂತರ ಹುಬ್ಬಳ್ಳಿ ಹೊಸ ಬಸ್ ಸ್ಟ್ಯಾಂಡ್‌ನಿಂದ ಬಸ್‌ ಹತ್ತಿ ಹಾವೇರಿಗೆ ಬಂದಿದ್ದ. ಹಾವೇರಿಯಿಂದ ಮೈಸೂರಿಗೆ ಟ್ರೈನ್ ಹತ್ತಿದ್ದ. ಮೈಸೂರಿನ ಮಹಾರಾಜ್ ಹೋಟೆಲ್‌ನಲ್ಲಿ ಮಲಗಿದ್ದ. ಆ ನಂತರ ಮೈಸೂರಿನಿಂದ ಹುಬ್ಬಳ್ಳಿಗೆ ಬರಲೆಂದು ವಾಪಸ್ ಬರುತ್ತಿದ್ದಾಗ ಟ್ರೈನ್‌ನಲ್ಲಿ ಸಾರ್ವಜನಿಕರೊಡನೆ ಕಿರಿಕ್ ಆಗಿ ಟ್ರೈನ್‌ನಿಂದ ಹಾರಿದ್ದ.

ಪೊಲೀಸರು ಹೇಳೋದೇನು?

“ಅಂಜಲಿ ಕೊಲೆ ಆರೋಪಿ ಪತ್ತೆಗಾಗಿ ಎಂಟು ತಂಡಗಳನ್ನು ನಾವು ರಚನೆ ಮಾಡಿದ್ದೆವು. ನಿನ್ನೆ ರೇಲ್ವೆ ಪೊಲೀಸರ ಸಹಾಯದಿಂದ ಆರೋಪಿ ಸಿಕ್ಕಿದ್ದಾನೆ. ಆರೋಪಿ ಗಿರೀಶ್‌ ತಲೆ ಮತ್ತು ಬೆನ್ನಿಗೆ ಗಂಭೀರ ಗಾಯವಾಗಿದೆ. ಸದ್ಯ ಕೋಮಾ ಸ್ಟೇಜ್‌ನಲ್ಲಿದ್ದಾನೆ. ಟ್ರೈನಿನಿಂದ ಯಾಕೆ ಜಿಗಿದ ಎಂದು ಅವನು ಹೇಳಬೇಕಿದೆ” ಎಂದು ಪೋಲಿಸ್ ಕಮೀಷನರ್ ರೇಣುಕಾ ಸುಕುಮಾರ್ ಹೇಳಿಕೆ ನೀಡಿದ್ದಾರೆ.

“ಬೆಳಗಿನ ಜಾವ 4.30ಗೆ ನಮ್ಮ ಕಸ್ಟಡಿಗೆ ದೊರೆತಿದ್ದಾನೆ. ಈತ ಮೈಸೂರಿನಿಂದ ಗೋವಾ, ಮಹಾರಾಷ್ಟ್ರ ಕಡೆ ಹೋಗಿ ತಲೆಮರೆಸಿಕೊಳ್ಳಬೇಕು ಎಂದು ಪ್ಲ್ಯಾನ್ ಮಾಡಿಕೊಂಡಿದ್ದ. ಗಿರೀಶ್ ಮೇಲೆ ಬೈಕ್ ಕಳ್ಳತನ ವಿಚಾರದಲ್ಲಿಯೂ 4 ಪ್ರಕರಣಗಳು ದಾಖಲು ಆಗಿವೆ. ಅವನು ಹೇಳುವ ಪ್ರಕಾರ ಹುಡುಗಿ ಫೋನ್ ಬ್ಲಾಕ್ ಮಾಡಿದ್ದಳು. ನಾವು ಪ್ರೀತಿ ಮಾಡ್ತಿದ್ದೆವು ಎಂದು ಹೇಳಿದ್ದಾನೆ. ಪ್ರಜ್ಞೆ ಬಂದರ ನಂತರ ಪೂರ್ತಿ ಹೇಳಿಕೆ ಪಡೆದುಕೊಳ್ಳಲಾಗುವುದು” ಎಂದು ತಿಳಿಸಿದ್ದಾರೆ.

ದೊಡ್ಡಬಳ್ಳಾಪುರ ಕೊಲೆ ಆರೋಪಿ ಕಾಲಿಗೆ ಗುಂಡು ಹಾರಿಸಿ ಬಂಧನ

ದೊಡ್ಡಬಳ್ಳಾಪುರ: ಕೊಲೆ ಆರೋಪಿಯೊಬ್ಬನ (Murder Suspect) ಕಾಲಿಗೆ ಪೊಲೀಸರು ಗುಂಡು ಹಾರಿಸಿ (Encounter) ಬಂಧಿಸಿದ್ದಾರೆ. ಹೇಮಂತ್‌ ಕುಮಾರ್‌ ಗೌಡ ಎಂಬ ಯುವಕನ ಕೊಲೆ (Murder Case) ಆರೋಪಿ ರೌಡಿ ಶೀಟರ್ ಶ್ರೀನಿವಾಸ್ ಅಲಿಯಾಸ್ ಮಿಟ್ಟೆ ಕಾಲಿಗೆ ಗುಂಡು ಹಾರಿಸಿ (Shoot out) ಬಂಧಿಸಲಾಗಿದೆ.

ಯಲಹಂಕ ತಾಲೂಕಿನ ಶ್ರೀರಾಮನಹಳ್ಳಿ ಬಳಿ ಘಟನೆ ನಡೆದಿದೆ. ರೌಡಿ‌ ಶೀಟರ್ ಬಂಧನಕ್ಕೆ ತೆರಳಿದ ವೇಳೆ ಪೊಲೀಸ್ ಕಾನ್‌ಸ್ಟೇಬಲ್ ಚಂದ್ರು ಮೇಲೆ ಈತ ಹಲ್ಲೆ‌ ನಡೆಸಿದ್ದಾನೆ. ಪೊಲೀಸರ ಮೇಲೆ ಹಲ್ಲೆ ಹಿನ್ನೆಲೆಯಲ್ಲಿ ಆತ್ಮರಕ್ಷಣೆಗಾಗಿ ಇನ್‌ಸ್ಪೆಕ್ಟರ್ ಸಾಧಿಕ್ ಪಾಷ ಅವರಿಂದ ಫೈರಿಂಗ್ ನಡೆದಿದೆ.

ಈತ ಕೊಲೆ ಕೇಸ್‌ನ 2ನೇ ಆರೋಪಿಯಾಗಿದ್ದಾನೆ. ಮೇ 11ರಂದು ದೊಡ್ಡಬಳ್ಳಾಪುರ ಹೊರವಲಯ ನವೋದಯ ಶಾಲೆಯ ಮುಂಭಾಗ ಹೇಮಂತ್ ಕುಮಾರ್ ಗೌಡ (27) ಎಂಬವರನ್ನು ಬರ್ಬರವಾಗಿ ಹತ್ಯೆ ಮಾಡಲಾಗಿತ್ತು. ಹೇಮಂತ್ ಅವರನ್ನು ಅಟ್ಟಾಡಿಸಿ ಕೊಲೆ ಮಾಡಿ ಆರೋಪಿಗಳು ಕಾರಿನಲ್ಲಿ ಶವದ ಜೊತೆ ರೌಂಡ್ಸ್ ಹಾಕಿದ್ದರು. ಪ್ರಕರಣ ದಾಖಲಿಸಿಕೊಂಡ ದೊಡ್ಡಬಳ್ಳಾಪುರ ಗ್ರಾಮಾಂತರ ಪೊಲೀಸ್‌ ಅಧಿಕಾರಿಗಳು ಆರೋಪಿಗಳ ಪತ್ತೆಗೆ ವಿಶೇಷ ತಂಡ ರಚಿಸಿ ಬಂಧನಕ್ಕಾಗಿ ಬಲೆ ಬೀಸಿದ್ದರು.

ಪ್ರಕರಣದ ಪ್ರಮುಖ ಆರೋಪಿ ನರಸಿಂಹಮೂರ್ತಿ ಅಲಿಯಾಸ್​ ಮಿಟ್ಟೆ ಎಂಬಾತನನ್ನು ಈಗಾಗಲೇ ದಸ್ತಗಿರಿ ಮಾಡಲಾಗಿದೆ. ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಮಲ್ಲಿಕಾರ್ಜುನ ಬಾಲದಂಡಿ, ಡಿವೈಎಸ್ಪಿ ರವಿಕುಮಾರ್, ಗ್ರಾಮಾಂತರ ಠಾಣೆ ಇನ್ಸ್ಪೆಕ್ಟರ್ ಸಾದಿಕ್ ಪಾಷ ನೇತೃತ್ವದ ತಂಡದಿಂದ ಕಾರ್ಯಾಚರಣೆ ನಡೆಸಲಾಗಿತ್ತು.

ಸಾಫ್ಟ್‌ವೇರ್‌ ಎಂಜಿನಿಯರ್‌ ಪತ್ನಿಯ ಅನುಮಾನಾಸ್ಪದ ಸಾವು

ಬೆಂಗಳೂರು: ರಾಜಧಾನಿಯ (bengaluru crime) ಬಸವೇಶ್ವರನಗರ ಪೊಲೀಸ್ ಠಾಣೆ ವ್ಯಾಪ್ತಿಯ ಮಂಜುನಾಥ ನಗರದಲ್ಲಿ ಮಹಿಳೆಯೊಬ್ಬರು ಆತ್ಮಹತ್ಯೆ (woman self harming) ಮಾಡಿಕೊಂಡ ಸ್ಥಿತಿಯಲ್ಲಿ ಶವ ಪತ್ತೆಯಾಗಿದೆ. ಮೃತರು ಸಾಫ್ಟ್‌ವೇರ್‌ ಎಂಜಿನಿಯರ್‌ (Software engineer) ಪತ್ನಿಯಾಗಿದ್ದು, ಇದೊಂದು ಅಸಹಜ ಸಾವು (UDR Case) ಎಂದು ಮೃತಳ ತವರಿನವರು ಶಂಕಿಸಿದ್ದಾರೆ.

ಮಂಜುನಾಥ ನಗರದ ಸಂಧ್ಯಾ ಮೃತ ಮಹಿಳೆ. ನೆನ್ನೆ ರಾತ್ರಿ ಘಟನೆ ನಡೆದಿದೆ. ನೇಣು ಬಿಗಿದ ಸ್ಥಿತಿಯಲ್ಲಿ ಸಂಧ್ಯಾ ಮೃತ ದೇಹ ಪತ್ತೆಯಾಗಿದೆ. ಇವರಿಗೆ ಮದುವೆಯಾಗಿ 5 ವರ್ಷ ಆಗಿತ್ತು. ನಾಲ್ಕು ವರ್ಷದ ಗಂಡು ಮಗುವೂ ಇತ್ತು. ಅಳಿಯ ಜಯಪ್ರಕಾಶ್‌ ಮೈತುಂಬಾ ಸಾಲ ಮಾಡಿ ಅದನ್ನು ತೀರಿಸಲು ಕಿರುಕುಳ ನೀಡುತ್ತಿದ್ದ. ನನ್ನ ಮಗಳಿಗೆ ಈ ವಿಚಾರವಾಗಿ ಕಿರುಕುಳ ನೀಡುತ್ತಿದ್ದ ಎಂದು ಸಂಧ್ಯಾ ತಂದೆ ಆಪಾದಿಸಿದ್ದಾರೆ. ಸದ್ಯ ಬಸವೇಶ್ವರನಗರ ಪೊಲೀಸ್ ಠಾಣಾ ಸಿಬ್ಬಂದಿ ಪ್ರಕರಣ ದಾಖಲಿಸಿಕೊಂಡು ತನಿಖೆ ನಡೆಸುತ್ತಿದ್ದಾರೆ.

ಇದನ್ನೂ ಓದಿ: Murder Case : ತಂಗಿಯನ್ನು ಬೈಕ್‌ನಲ್ಲಿ ಸುತ್ತಾಡಿಸುತ್ತಿದ್ದವನನ್ನು ಸ್ಕ್ರೂಡ್ರೈವರ್‌ನಿಂದ ಚುಚ್ಚಿ ಕೊಂದ

Continue Reading

ಕ್ರೈಂ

Shoot Out: ದೊಡ್ಡಬಳ್ಳಾಪುರ ಕೊಲೆ ಆರೋಪಿ ಕಾಲಿಗೆ ಗುಂಡು ಹಾರಿಸಿ ಬಂಧನ

Shoot Out: ಮೇ 11ರಂದು ದೊಡ್ಡಬಳ್ಳಾಪುರ ಹೊರವಲಯ ನವೋದಯ ಶಾಲೆಯ ಮುಂಭಾಗ ಹೇಮಂತ್ ಕುಮಾರ್ ಗೌಡ (27) ಎಂಬವರನ್ನು ಬರ್ಬರವಾಗಿ ಹತ್ಯೆ ಮಾಡಲಾಗಿತ್ತು. ಹೇಮಂತ್ ಅವರನ್ನು ಅಟ್ಟಾಡಿಸಿ ಕೊಲೆ ಮಾಡಿ ಆರೋಪಿಗಳು ಕಾರಿನಲ್ಲಿ ಶವದ ಜೊತೆ ರೌಂಡ್ಸ್ ಹಾಕಿದ್ದರು.

VISTARANEWS.COM


on

shoot out doddaballapur murder case
ಆರೋಪಿ ಶ್ರೀನಿವಾಸ್‌ ಅಲಿಯಾಸ್‌ ಮಿಟ್ಟೆ, ಮೃತ ಹೇಮಂತ್
Koo

ದೊಡ್ಡಬಳ್ಳಾಪುರ: ಕೊಲೆ ಆರೋಪಿಯೊಬ್ಬನ (Murder Suspect) ಕಾಲಿಗೆ ಪೊಲೀಸರು ಗುಂಡು ಹಾರಿಸಿ (Encounter) ಬಂಧಿಸಿದ್ದಾರೆ. ಹೇಮಂತ್‌ ಕುಮಾರ್‌ ಗೌಡ ಎಂಬ ಯುವಕನ ಕೊಲೆ (Murder Case) ಆರೋಪಿ ರೌಡಿ ಶೀಟರ್ ಶ್ರೀನಿವಾಸ್ ಅಲಿಯಾಸ್ ಮಿಟ್ಟೆ ಕಾಲಿಗೆ ಗುಂಡು ಹಾರಿಸಿ (Shoot out) ಬಂಧಿಸಲಾಗಿದೆ.

ಯಲಹಂಕ ತಾಲೂಕಿನ ಶ್ರೀರಾಮನಹಳ್ಳಿ ಬಳಿ ಘಟನೆ ನಡೆದಿದೆ. ರೌಡಿ‌ ಶೀಟರ್ ಬಂಧನಕ್ಕೆ ತೆರಳಿದ ವೇಳೆ ಪೊಲೀಸ್ ಕಾನ್‌ಸ್ಟೇಬಲ್ ಚಂದ್ರು ಮೇಲೆ ಈತ ಹಲ್ಲೆ‌ ನಡೆಸಿದ್ದಾನೆ. ಪೊಲೀಸರ ಮೇಲೆ ಹಲ್ಲೆ ಹಿನ್ನೆಲೆಯಲ್ಲಿ ಆತ್ಮರಕ್ಷಣೆಗಾಗಿ ಇನ್‌ಸ್ಪೆಕ್ಟರ್ ಸಾಧಿಕ್ ಪಾಷ ಅವರಿಂದ ಫೈರಿಂಗ್ ನಡೆದಿದೆ.

ಈತ ಕೊಲೆ ಕೇಸ್‌ನ 2ನೇ ಆರೋಪಿಯಾಗಿದ್ದಾನೆ. ಮೇ 11ರಂದು ದೊಡ್ಡಬಳ್ಳಾಪುರ ಹೊರವಲಯ ನವೋದಯ ಶಾಲೆಯ ಮುಂಭಾಗ ಹೇಮಂತ್ ಕುಮಾರ್ ಗೌಡ (27) ಎಂಬವರನ್ನು ಬರ್ಬರವಾಗಿ ಹತ್ಯೆ ಮಾಡಲಾಗಿತ್ತು. ಹೇಮಂತ್ ಅವರನ್ನು ಅಟ್ಟಾಡಿಸಿ ಕೊಲೆ ಮಾಡಿ ಆರೋಪಿಗಳು ಕಾರಿನಲ್ಲಿ ಶವದ ಜೊತೆ ರೌಂಡ್ಸ್ ಹಾಕಿದ್ದರು. ಪ್ರಕರಣ ದಾಖಲಿಸಿಕೊಂಡ ದೊಡ್ಡಬಳ್ಳಾಪುರ ಗ್ರಾಮಾಂತರ ಪೊಲೀಸ್‌ ಅಧಿಕಾರಿಗಳು ಆರೋಪಿಗಳ ಪತ್ತೆಗೆ ವಿಶೇಷ ತಂಡ ರಚಿಸಿ ಬಂಧನಕ್ಕಾಗಿ ಬಲೆ ಬೀಸಿದ್ದರು.

ಪ್ರಕರಣದ ಪ್ರಮುಖ ಆರೋಪಿ ನರಸಿಂಹಮೂರ್ತಿ ಅಲಿಯಾಸ್​ ಮಿಟ್ಟೆ ಎಂಬಾತನನ್ನು ಈಗಾಗಲೇ ದಸ್ತಗಿರಿ ಮಾಡಲಾಗಿದೆ. ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಮಲ್ಲಿಕಾರ್ಜುನ ಬಾಲದಂಡಿ, ಡಿವೈಎಸ್ಪಿ ರವಿಕುಮಾರ್, ಗ್ರಾಮಾಂತರ ಠಾಣೆ ಇನ್ಸ್ಪೆಕ್ಟರ್ ಸಾದಿಕ್ ಪಾಷ ನೇತೃತ್ವದ ತಂಡದಿಂದ ಕಾರ್ಯಾಚರಣೆ ನಡೆಸಲಾಗಿತ್ತು.

ಸಾಫ್ಟ್‌ವೇರ್‌ ಎಂಜಿನಿಯರ್‌ ಪತ್ನಿಯ ಅನುಮಾನಾಸ್ಪದ ಸಾವು

ಬೆಂಗಳೂರು: ರಾಜಧಾನಿಯ (bengaluru crime) ಬಸವೇಶ್ವರನಗರ ಪೊಲೀಸ್ ಠಾಣೆ ವ್ಯಾಪ್ತಿಯ ಮಂಜುನಾಥ ನಗರದಲ್ಲಿ ಮಹಿಳೆಯೊಬ್ಬರು ಆತ್ಮಹತ್ಯೆ (woman self harming) ಮಾಡಿಕೊಂಡ ಸ್ಥಿತಿಯಲ್ಲಿ ಶವ ಪತ್ತೆಯಾಗಿದೆ. ಮೃತರು ಸಾಫ್ಟ್‌ವೇರ್‌ ಎಂಜಿನಿಯರ್‌ (Software engineer) ಪತ್ನಿಯಾಗಿದ್ದು, ಇದೊಂದು ಅಸಹಜ ಸಾವು (UDR Case) ಎಂದು ಮೃತಳ ತವರಿನವರು ಶಂಕಿಸಿದ್ದಾರೆ.

ಮಂಜುನಾಥ ನಗರದ ಸಂಧ್ಯಾ ಮೃತ ಮಹಿಳೆ. ನೆನ್ನೆ ರಾತ್ರಿ ಘಟನೆ ನಡೆದಿದೆ. ನೇಣು ಬಿಗಿದ ಸ್ಥಿತಿಯಲ್ಲಿ ಸಂಧ್ಯಾ ಮೃತ ದೇಹ ಪತ್ತೆಯಾಗಿದೆ. ಇವರಿಗೆ ಮದುವೆಯಾಗಿ 5 ವರ್ಷ ಆಗಿತ್ತು. ನಾಲ್ಕು ವರ್ಷದ ಗಂಡು ಮಗುವೂ ಇತ್ತು. ಅಳಿಯ ಜಯಪ್ರಕಾಶ್‌ ಮೈತುಂಬಾ ಸಾಲ ಮಾಡಿ ಅದನ್ನು ತೀರಿಸಲು ಕಿರುಕುಳ ನೀಡುತ್ತಿದ್ದ. ನನ್ನ ಮಗಳಿಗೆ ಈ ವಿಚಾರವಾಗಿ ಕಿರುಕುಳ ನೀಡುತ್ತಿದ್ದ ಎಂದು ಸಂಧ್ಯಾ ತಂದೆ ಆಪಾದಿಸಿದ್ದಾರೆ. ಸದ್ಯ ಬಸವೇಶ್ವರನಗರ ಪೊಲೀಸ್ ಠಾಣಾ ಸಿಬ್ಬಂದಿ ಪ್ರಕರಣ ದಾಖಲಿಸಿಕೊಂಡು ತನಿಖೆ ನಡೆಸುತ್ತಿದ್ದಾರೆ.

ತಂಗಿಯನ್ನು ಬೈಕ್‌ನಲ್ಲಿ ಸುತ್ತಾಡಿಸುತ್ತಿದ್ದವನನ್ನು ಸ್ಕ್ರೂಡ್ರೈವರ್‌ನಿಂದ ಚುಚ್ಚಿ ಕೊಂದ

ಬೆಳಗಾವಿ : ಬೆಳಗಾವಿಯಲ್ಲಿ (Belgavi News) ಹಾಡಹಗಲೇ ಸ್ಕ್ರೂಡ್ರೈವರ್‌ನಿಂದ ಚುಚ್ಚಿ ಯುವಕನ (Murder Case) ಕೊಲೆ ಮಾಡಲಾಗಿದೆ. ಬೆಳಗಾವಿ ನಗರದ ಮಹಾಂತೇಶ ನಗರದ ಬ್ರಿಡ್ಜ್‌ ಬಳಿ ಘಟನೆ ನಡೆದಿದೆ. ಗಾಂಧಿ ನಗರ ನಿವಾಸಿ ಇಬ್ರಾಹಿಂ ಗೌಸ್ (22) ಮೃತಪಟ್ಟವನು. ಮುಜಮಿಲ್ ಸತ್ತಿಗೇರಿ ಕೊಲೆ ಆರೋಪಿಯಾಗಿದ್ದಾನೆ.

ಇದೇ ಬಡಾವಣೆಯ ಯುವತಿ ಜತೆಗೆ ಇಬ್ರಾಹಿಂ ಪ್ರೀತಿ -ಪ್ರೇಮ ಅಂತ ಓಡಾಡುತ್ತಿದ್ದ . ಗುರುವಾರ ತನ್ನ ಹುಡುಗಿ ಜತೆಗೆ ಇಬ್ರಾಹಿಂ ಬೈಕ್‌ನಲ್ಲಿ ಹೊರಟ್ಟಿದ್ದ. ಇದನ್ನು ನೋಡಿದ ಯುವತಿಯ ಸಹೋದರ ಮುಜಮಿಲ್ ಸತ್ತಿಗೇರಿ ಎಂಬಾತ ಸ್ಕ್ರೂಡ್ರೈವರ್‌ನಿಂದ ಚುಚ್ಚಿದ್ದಾನೆ.

ಕೂಡಲೇ ಅಲ್ಲಿದ್ದ ಸ್ಥಳೀಯರು ಗಾಯಾಳು ಇಬ್ರಾಹಿಂನನ್ನು ಸ್ಥಳೀಯ ಆಸ್ಪತ್ರೆಗೆ ದಾಖಲಿಸಿದ್ದಾರೆ. ಆದರೆ ಇಬ್ರಾಹಿಂ ಚಿಕಿತ್ಸೆ ಫಲಿಸದೇ ಖಾಸಗಿ ಆಸ್ಪತ್ರೆಯಲ್ಲಿ ಮೃತಪಟ್ಟಿದ್ದಾನೆ. ಮಾಳ ಮಾರುತಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ. ಈ ಸಂಬಂಧ ಪ್ರಕರಣ ದಾಖಲಾಗಿದ್ದು ತನಿಖೆಯನ್ನು ನಡೆಸುತ್ತಿದ್ದಾರೆ. ಮರಣೋತ್ತರ ಪರೀಕ್ಷೆ ನಂತರ ಕುಟುಂಬಸ್ಥರಿಗೆ ಮೃತದೇಹ ಹಸ್ತಾಂತರ ಮಾಡಲಾಗಿದೆ.

ಇದನ್ನೂ ಓದಿ | Davanagere News: ದಾವಣಗೆರೆ ಸಮೀಪದ ಕೆರೆಯಲ್ಲಿ ಲಕ್ಷಕ್ಕೂ ಅಧಿಕ ಮೀನುಗಳ ಮಾರಣಹೋಮ; ವಿಷಪ್ರಾಶನ ಶಂಕೆ

Continue Reading

ಕ್ರೈಂ

Illegal hunting: ಶಿಕಾರಿಗೆ ತೆರಳಿದ ಯುವಕನಿಗೆ ಗುಂಡು ತಗುಲಿ ಸಾವು, ಆಕಸ್ಮಿಕವೋ ಕೊಲೆಯೋ?

Illegal hunting: ಅಕ್ರಮ ಬೇಟೆಗೆ ಬಂದವರು ಯಾವುದೋ ಪ್ರಾಣಿ ಎಂದು ಭಾವಿಸಿ ಗುಂಡು ಹೊಡೆದಿದ್ದರಿಂದ ಹೀಗಾಗಿರಬಹುದು ಎಂದು ಶಂಕಿಸಲಾಗಿದೆ. ಬೇರೆ ಅಪರಾಧದ ಆಯಾಮಗಳ ಕುರಿತು ಕೂಡ ತನಿಖೆ ನಡೆಯುತ್ತಿದೆ.

VISTARANEWS.COM


on

illegal hunting chikkamagaluru
Koo

ಚಿಕ್ಕಮಗಳೂರು: ಶಿಕಾರಿಗೆ (Illegal hunting) ತೆರಳಿದ್ದ ಯುವಕನ ಮೇಲೆ ಮಿಸ್ ಫೈರ್ (misfire) ಆದ ಪರಿಣಾಮ, ಯುವಕ ಸ್ಥಳದಲ್ಲೇ (crime news) ಮೃತಪಟ್ಟಿದ್ದಾನೆ. ಚಿಕ್ಕಮಗಳೂರಿನ (Chikkamagaluru crime) ತಾಲೂಕಿನ ಉಲುವಾಗಿಲು ಗ್ರಾಮದ ಕಾಫಿ ತೋಟದಲ್ಲಿ ದುರ್ಘಟನೆ ನಡೆದಿದೆ.

ಕೆರೆಮಕ್ಕಿ ಗ್ರಾಮದ ಸಂಜು (33) ಸಾವಿಗೀಡಾದ ಯುವಕ. ಕಾಫಿ ತೋಟದ ಅಂಚಿನಲ್ಲಿರುವ ಕಾಡಿಗೆ ಅಕ್ರಮವಾಗಿ ಪ್ರಾಣಿ ಬೇಟೆಗೆ ತೆರಳಿದ್ದಾಗ ಅವಘಡ ಸಂಭವಿಸಿದೆ. ಇದೇ ಥರ ಅಕ್ರಮ ಬೇಟೆಗೆ ಬಂದವರು ಯಾವುದೋ ಪ್ರಾಣಿ ಎಂದು ಭಾವಿಸಿ ಗುಂಡು ಹೊಡೆದಿದ್ದರಿಂದ ಹೀಗಾಗಿರಬಹುದು ಎಂದು ಶಂಕಿಸಲಾಗಿದೆ. ಬೇರೆ ಅಪರಾಧದ ಆಯಾಮಗಳ ಕುರಿತು ಕೂಡ ತನಿಖೆ ನಡೆಯುತ್ತಿದೆ. ಮಲ್ಲಂದೂರು ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ.

ಅಂಜಲಿ ಹಂತಕನ ಬಂಧನ, ಸಾರ್ವಜನಿಕರಿಂದ ಗೂಸಾ

ಹುಬ್ಬಳ್ಳಿ: ಹುಬ್ಬಳ್ಳಿಯಲ್ಲಿ (Hubli news) ನೇಹಾ ಹಿರೇಮಠ (Neha Hiremath murder) ಕೊಲೆ ಮಾದರಿಯಲ್ಲಿ ಮನೆಗೆ ನುಗ್ಗಿ ಅಂಜಲಿ ಎಂಬಾಕೆಯನ್ನು ಚುಚ್ಚಿ ಸಾಯಿಸಿದ (Anjali Murder Case) ಆರೋಪಿ ಗಿರೀಶ್‌ನನ್ನು ಬಂಧಿಸಲಾಗಿದೆ. ಈತ ಮೂರು ದಿನಗಳಿಂದ ತಲೆ ತಪ್ಪಿಸಿಕೊಂಡು (Abscond) ಪರಾರಿಯಾಗಿದ್ದ.

ಆರೋಪಿಯನ್ನು‌ ಬಂಧಿಸಿ ಹುಬ್ಬಳ್ಳಿಗೆ ಕರೆತರಲಾಗಿದೆ ಎಂದು ಪೊಲೀಸ್ ಆಯುಕ್ತೆ ರೇಣುಕಾ ಸುಕುಮಾರ್ ಮಾಹಿತಿ ನೀಡಿದ್ದಾರೆ. ಇದೇ ವೇಳೆ ಕೊಲೆಗಾರ ಗಿರೀಶ್‌ನನ್ನು ಸಾರ್ವಜನಿಕರು ಥಳಿಸಿದ್ದಾರೆ. ದಾವಣಗೆರೆಯಲ್ಲಿದ್ದ ಈತನನ್ನು ಬಂಧಿಸಲು ಪೊಲೀಸರು ತೆರಳಿದ್ದ ಸಂದರ್ಭ, ಸಾರ್ವಜನಿಕರು ರೊಚ್ಚಿಗೆದ್ದು ಹಂತಕ ಗಿರೀಶ್‌ನನ್ನು ಥಳಿಸಿದರು. ಗಾಯಗೊಂಡ ಗಿರೀಶ್‌ನನ್ನು ಪೊಲೀಸರು ಹುಬ್ಬಳ್ಳಿಯ ಕಿಮ್ಸ್ ಆಸ್ಪತ್ರೆಗೆ ದಾಖಲಿಸಿದ್ದಾರೆ.

ಏನಿದು ಘಟನೆ?

ಹುಬ್ಬಳ್ಳಿಯಲ್ಲಿ ನೇಹಾ ಹಿರೇಮಠ (Neha Hiremath murder) ಕೊಲೆ ಪ್ರಕರಣ ನೆನಪಿನಿಂದ ಮಾಸುವ ಮುನ್ನವೇ ಮತ್ತೊಬ್ಬ ಯುವತಿಯ ಕೊಲೆ ಬುಧವಾರ ಮುಂಜಾನೆ ನಡೆದಿತ್ತು. ನಗರದ ವೀರಾಪೂರ ಓಣಿಯ ಮನೆಯಲ್ಲಿ ಮಲಗಿದ್ದಾಗ ಮನೆಗೇ ನುಗ್ಗಿದ್ದ ದುಷ್ಕರ್ಮಿ ಚಾಕುವಿನಿಂದ ಯುವತಿ ಅಂಜಲಿ ಅಂಬಿಗೇರಗೆ (20) ಇರಿದು ಕೊಂದಿದ್ದ.

Anjali Murder Case

ಕೊಲೆ ಮಾಡಿದ ಆರೋಪಿ ಗಿರೀಶ್ ಸಾವಂತ ಎಂಬಾತನನ್ನು ಪೊಲೀಸರು ಬಂಧಿಸಿದ್ದರು. ತನ್ನ ಪ್ರೀತಿಯನ್ನು‌ ನಿರಾಕರಿಸಿದ್ದಕ್ಕೆ ಕ್ರುದ್ಧನಾದ ಗಿರೀಶ್‌ ಈ ಕೃತ್ಯ ಎಸಗಿದ್ದ. ಈ ಸೈಕೋ ಪ್ರೇಮಿ, ಈ ಹಿಂದೆ ಮೈಸೂರಿಗೆ ಬಾ ಎಂದು ಅಂಜಲಿಗೆ ಧಮಕಿ ಹಾಕಿದ್ದ. “ನನ್ನ ಜೊತೆ ಬರದೆ ಹೋದರೆ ನಿರಂಜನ ಹಿರೇಮಠ ಮಗಳಿಗೆ ಹೇಗೆ ಆಗಿದೆ ಹಾಗೆ ಮಾಡ್ತೀನಿ” ಎಂದು ಧಮಕಿ ಹಾಕಿದ್ದ. ಗಿರೀಶ ಬೆದರಿಕೆ ಹಾಕಿರುವುದನ್ನು ಅಂಜಲಿಯ ಅಜ್ಜಿ ಗಂಗಮ್ಮ ಅವರು ಪೊಲೀಸರ ಗಮನಕ್ಕೂ ತಂದಿದ್ದರು. ಆದರೆ ಪೊಲೀಸರು ಕ್ರಮ ಕೈಗೊಂಡಿರಲಿಲ್ಲ.

ಸ್ನೇಹಿತನೂ ಕೊಲೆ ಆರೋಪಿ

ಹಂತಕ ಗಿರೀಶ್‌ನ‌ ಸ್ನೇಹಿತ ಕೂಡ ಕೊಲೆ ಆರೋಪಿ (Murder suspect) ಎಂಬುದು ಬಯಲಿಗೆ ಬಂದಿದೆ. ತನ್ನ ಸ್ನೇಹಿತನಿಂದಲೇ ಈತ ಪ್ರೇರಣೆ ಪಡೆದಿರಬಹುದು ಎಂದು ಅಂದಾಜಿಸಲಾಗಿದೆ. ಕಳೆದ ಎರಡು ದಿನಗಳ ಹಿಂದೆ ಕೊಲೆ ಪ್ರಕರಣ ಒಂದರಲ್ಲಿ ಗಿರೀಶ್‌ನ ಸ್ನೇಹಿತ ಶಶಿ ಆರೆಸ್ಟ್ ಆಗಿದ್ದಾನೆ. ಶಶಿ ಮತ್ತು ಗಿರೀಶ್ ಇಬ್ಬರೂ ಸ್ನೇಹಿತರು.‌ ಎರಡು ದಿನಗಳ ಹಿಂದೆ ಹುಬ್ಬಳ್ಳಿ ತಾಲೂಕಿನ ಹಳ್ಯಾಳದಲ್ಲಿ ಕೊಲೆ ನಡೆದಿದ್ದು, ಸದ್ದಾಂ ಎಂಬ ಯುವಕನ ಕೊಲೆಯಾಗಿತ್ತು. ಕೊಲೆ ಮಾಡಿದ್ದ ಪ್ರಕರಣದಲ್ಲಿ ಶಶಿ ಜೈಲು ಪಾಲಾಗಿದ್ದಾನೆ.

ಶಶಿ ಈ ಕೊಲೆ ಮಾಡಿದ ಬಳಿಕ ಅದೇ ರೀತಿ ಅಂಜಲಿಯನ್ನು ಮುಗಿಸಲು ಗಿರೀಶ್‌ ಪ್ಲ್ಯಾನ್ ಮಾಡಿದ್ದ. ತನ್ನ ಸ್ನೇಹಿತ ಮಾಡಿರುವ ಕೊಲೆಯಿಂದಲೇ ಪ್ರೇರಣೆ ಪಡೆದಿದ್ದ ಎಂದು ತರ್ಕಿಸಲಾಗಿದೆ. ಸ್ನೇಹಿತ ಕೊಲೆ ಮಾಡಿದ ಮೂರು ದಿನಗಳ ಬಳಿಕ ಗಿರೀಶನಿಂದ ಕೊಲೆ ಸಂಭವಿಸಿದೆ. ಇವರಿಬ್ಬರೂ‌ ಕೂಡಾ ಬೈಕ್ ಕಳ್ಳತನದ ಆರೋಪಿಗಳಾಗಿದ್ದಾರೆ.

ಇದನ್ನೂ ಓದಿ | Davanagere News: ದಾವಣಗೆರೆ ಸಮೀಪದ ಕೆರೆಯಲ್ಲಿ ಲಕ್ಷಕ್ಕೂ ಅಧಿಕ ಮೀನುಗಳ ಮಾರಣಹೋಮ; ವಿಷಪ್ರಾಶನ ಶಂಕೆ

Continue Reading
Advertisement
Murder Case in Anekla
ಬೆಂಗಳೂರು ಗ್ರಾಮಾಂತರ3 mins ago

Murder case : ಬಯಲು ಶೌಚಾಲಯಕ್ಕೆ ಹೋದ ಬಾಲಕನ ದೊಣ್ಣೆಯಿಂದ ಹೊಡೆದು ಕೊಂದರು

Kannada New Movie tanush shivannas mr natwarlal In OTT
ಸ್ಯಾಂಡಲ್ ವುಡ್4 mins ago

Kannada New Movie: ಒಟಿಟಿಗೆ ಲಗ್ಗೆ ಇಟ್ಟ ತನುಷ್ ಶಿವಣ್ಣ ಅಭಿನಯದ ಕ್ರೈಮ್-ಆ್ಯಕ್ಷನ್ ಸಿನಿಮಾ ʻMr ನಟ್ವರ್ ಲಾಲ್ʼ!

Viral News
ವೈರಲ್ ನ್ಯೂಸ್8 mins ago

Viral News: ಅಂತ್ಯಕ್ರಿಯೆ ವೇಳೆ ಬದುಕಿ ಬಂದ ಮಗಳು; ಖುಷಿಯಾಗಿದ್ದ ಪೋಷಕರಿಗೆ ಮತ್ತೆ ಶಾಕ್‌!

Aniruddha Jatkar Chef Chidambara Release Date announce
ಸ್ಯಾಂಡಲ್ ವುಡ್17 mins ago

Aniruddha Jatkar: ಅನಿರುದ್ದ್ ನಟನೆಯ “Chef ಚಿದಂಬರ” ರಿಲೀಸ್‌ ಡೇಟ್‌ ಅನೌನ್ಸ್‌!

Viral Video
ಕ್ರೀಡೆ37 mins ago

Viral Video: ಗಲ್ಲಿ ಕ್ರಿಕೆಟ್​ನಲ್ಲಿ ಎಡಗೈ ಬ್ಯಾಟಿಂಗ್​ ನಡೆಸಿದ ಕೆ.ಎಲ್​ ರಾಹುಲ್​

Physical Abuse
ಕ್ರೈಂ52 mins ago

Physical Abuse: ತೀರ್ಥದಲ್ಲಿ ನಿದ್ದೆ ಮಾತ್ರೆ ಬೆರೆಸಿ ಅರ್ಚಕನಿಂದ ನಿರೂಪಕಿ ಮೇಲೆ ಅತ್ಯಾಚಾರ

anjali murder suspect girish2
ಕ್ರೈಂ54 mins ago

Anjali Murder Case: ಥಳಿಸಿದವರಿಗೆ ಈತ ಅಂಜಲಿ ಹಂತಕ ಎಂದು ಗೊತ್ತೇ ಇರಲಿಲ್ಲ! ಕೊಲೆಗಾರ ಸಿಕ್ಕಿಬಿದ್ದಿದ್ದು ಹೀಗೆ

Viral video
ವೈರಲ್ ನ್ಯೂಸ್58 mins ago

Viral Video: ಅಬ್ಬಾ.. ಮದ್ವೆ ಮಂಟಪದಲ್ಲೇ ಬಿಗ್‌ ಫೈಟ್‌; ವರನಿಗಾಗಿ ಯುವತಿಯರ ಮಾರಾಮಾರಿ-ವಿಡಿಯೋ ವೈರಲ್‌

T20 World Cup 2024
ಕ್ರೀಡೆ1 hour ago

T20 World Cup 2024: ಅಭ್ಯಾಸ ಪಂದ್ಯಗಳ ವೇಳಾಪಟ್ಟಿ ಪ್ರಕಟ; ಭಾರತದ ಎದುರಾಳಿ ಯಾರು?

Anushka Shetty producer marriage news viral
ಟಾಲಿವುಡ್1 hour ago

Anushka Shetty: ಕನ್ನಡ ನಿರ್ಮಾಪಕನ ಜತೆ ʻಟಾಲಿವುಡ್‌ ಸ್ವೀಟಿʼ ಅನುಷ್ಕಾ ಶೆಟ್ಟಿ ಮದುವೆ?

Sharmitha Gowda in bikini
ಕಿರುತೆರೆ7 months ago

Geetha Serial Kannada: ನಿದ್ದೆ ಕದ್ದ ಚೋರಿ! ನಟಿ `ಭಾನುಮತಿ’ ಹಾಟ್‌ ಪೋಟೊಗಳಿಗೆ ಫ್ಯಾನ್ಸ್ ಫುಲ್ ಫಿದಾ

Kannada Serials
ಕಿರುತೆರೆ7 months ago

Kannada Serials TRP: 2ನೇ ಸ್ಥಾನದಲ್ಲಿ 2 ಧಾರಾವಾಹಿಗಳು; ಟಿಆರ್‌ಪಿ ರೇಸ್‌ನಲ್ಲಿಲ್ಲ ಭಾಗ್ಯಲಕ್ಷ್ಮೀ!

Bigg Boss- Saregamapa 20 average TRP
ಕಿರುತೆರೆ7 months ago

Kannada Serials TRP: ಏಳನೇ ಸ್ಥಾನಕ್ಕೆ ʻಅಮೃತಧಾರೆʼ ಕುಸಿತ; ಬಿಗ್‌ ಬಾಸ್‌-ಸರಿಗಮಪ ಟಿಆರ್‌ಪಿ ಎಷ್ಟು?

galipata neetu
ಕಿರುತೆರೆ6 months ago

Kanyadana Serial: ಕಿರುತೆರೆಗೆ ಮತ್ತೆ ಎಂಟ್ರಿ ಕೊಟ್ಟ ʻಗಾಳಿಪಟʼ ಖ್ಯಾತಿಯ ʻನೀತುʼ!

Kannada Serials
ಕಿರುತೆರೆ8 months ago

Kannada Serials TRP: ನಾಲ್ಕನೇ ಸ್ಥಾನಕ್ಕೆ ಕುಸಿತ ಕಂಡ ʻಸೀತಾ ರಾಮʼ; ಟಿಆರ್‌ಪಿ ರೇಸ್‌ಗೆ ʻಭಾಗ್ಯಲಕ್ಷ್ಮಿʼ ಬ್ಯಾಕ್‌!

Kannada Serials
ಕಿರುತೆರೆ7 months ago

Kannada Serials TRP: ಟಿಆರ್‌ಪಿಯಲ್ಲಿ ʻಭಾಗ್ಯಲಕ್ಷ್ಮೀʼ ಹವಾ; ʻಪುಟ್ಟಕ್ಕನ ಮಕ್ಕಳುʼ ಧಾರಾವಾಹಿಗೆ ಸಂಕಷ್ಟ!

Bigg Boss' dominates TRP; Sita Rama fell to the sixth position
ಕಿರುತೆರೆ7 months ago

Kannada Serials TRP: ಟಿಆರ್‌ಪಿಯಲ್ಲಿ ʻಬಿಗ್ ಬಾಸ್ʼದೇ ಮೇಲುಗೈ; 6ನೇ ಸ್ಥಾನಕ್ಕೆ ಕುಸಿದ ʻಸೀತಾ ರಾಮʼ

geetha serial Dhanush gowda engagement
ಕಿರುತೆರೆ5 months ago

Dhanush Gowda: ಗೀತಾ ಧಾರಾವಾಹಿ ನಟನ ನಿಶ್ಚಿತಾರ್ಥ; ಭವ್ಯಾಳ ಕಮೆಂಟ್‌ ಬಾಕ್ಸ್‌ ಆಫ್‌!

varun
ಕಿರುತೆರೆ6 months ago

Brindavana Serial: ʼಬೃಂದಾವನʼ ಧಾರಾವಾಹಿಯಲ್ಲಿ ದೊಡ್ಡ ಟ್ವಿಸ್ಟ್‌; ಪ್ರಮುಖ ಪಾತ್ರಧಾರಿಯೇ ಬದಲು

Kannada Serials
ಕಿರುತೆರೆ8 months ago

Kannada Serials TRP: ಟಿಆರ್‌ಪಿಯಲ್ಲಿ ಏರಿಕೆ ಕಂಡ ʻಅಮೃತಧಾರೆʼ; ʻಗಟ್ಟಿಮೇಳʼಕ್ಕೆ ನಾಲ್ಕನೇ ಸ್ಥಾನ!

Karnataka weather Forecast
ಮಳೆ5 hours ago

Karnataka Weather : ಮೈಸೂರು, ಮಂಡ್ಯ ಸೇರಿ ಈ 7 ಜಿಲ್ಲೆಗಳಲ್ಲಿ ವ್ಯಾಪಕ ಮಳೆ ಸಂಭವ

Dina Bhavishya
ಭವಿಷ್ಯ6 hours ago

Dina Bhavishya : ಈ ರಾಶಿಯ ಪ್ರೇಮಿಗಳಿಗೆ ಮನೆಯಿಂದ ಸಿಗುತ್ತೆ ಗ್ರೀನ್‌ ಸಿಗ್ನಲ್‌

Karnataka Weather Forecast
ಮಳೆ18 hours ago

Karnataka Weather : ಭಾರಿ ಮಳೆಗೆ ಕೊಟ್ಟೂರು ಬಸ್ ಸ್ಟ್ಯಾಂಡ್‌ ಜಲಾವೃತ; ‌ ತಾಯಿ-ಮಗ ಗ್ರೇಟ್‌ ಎಸ್ಕೇಪ್‌

Drowned in water
ಹಾಸನ21 hours ago

Drowned in water : ಕೆರೆಯಲ್ಲಿ ಈಜಲು ಹೋದ ನಾಲ್ವರು ನೀರುಪಾಲು; ಓರ್ವ ಬಾಲಕ ಪಾರು

Suspicious Case
ಬೆಂಗಳೂರು1 day ago

Suspicious Case : ಬಾತ್‌ ರೂಂನಲ್ಲಿತ್ತು ಕಾಲೇಜು ಹುಡುಗಿ ಡೆಡ್‌ ಬಾಡಿ; ಕುತ್ತಿಗೆ ಕೊಯ್ದು ಸಾಯಿಸಿದವರು ಯಾರು?

Prajwal Revanna Case
ಕರ್ನಾಟಕ2 days ago

Prajwal Revanna Case: ಪ್ರಜ್ವಲ್‌ ರೇವಣ್ಣ ಇಂದೇ ಜರ್ಮನಿಯಿಂದ ಭಾರತಕ್ಕೆ? ಎಸ್‌ಐಟಿ ಅಲರ್ಟ್‌

Dina Bhavishya
ಭವಿಷ್ಯ2 days ago

Dina Bhavishya : ಭೂ ವ್ಯವಹಾರಕ್ಕೆ ಇದು ಸೂಕ್ತ ಸಮಯ; ವ್ಯಾಪಾರದಲ್ಲಿ ಡಬಲ್‌ ಲಾಭ

HD Revanna Released first reaction after release will be acquitted of all charges
ರಾಜಕೀಯ3 days ago

HD Revanna Released: ರಿಲೀಸ್‌ ಬಳಿಕ ರೇವಣ್ಣ ಫಸ್ಟ್‌ ರಿಯಾಕ್ಷನ್;‌ ನ್ಯಾಯಾಂಗದ ಮೇಲೆ ನಂಬಿಕೆ ಇದೆ; ಆರೋಪ ಮುಕ್ತನಾಗುವೆ

CM Siddaramaiah says Our government is stable for 5 years BJP will disintegrate
Lok Sabha Election 20243 days ago

CM Siddaramaiah: ನಮ್ಮ ಸರ್ಕಾರ 5 ವರ್ಷ ಸುಭದ್ರ; ಚುನಾವಣೆ ಬಳಿಕ ಬಿಜೆಪಿ ಛಿದ್ರ ಎಂದ ಸಿಎಂ ಸಿದ್ದರಾಮಯ್ಯ!

I dont want to go to other states for Lok Sabha Election 2024 campaign for Congress says CM Siddaramaiah
Lok Sabha Election 20243 days ago

CM Siddaramaiah: ಕಾಂಗ್ರೆಸ್‌ ಪರ ಬೇರೆ ರಾಜ್ಯಗಳಿಗೆ ಪ್ರಚಾರಕ್ಕೆ ಹೋಗಲು ನನಗೆ ಇಷ್ಟವಿಲ್ಲ: ಸಿಎಂ ಸಿದ್ದರಾಮಯ್ಯ!

ಟ್ರೆಂಡಿಂಗ್‌