Viral Video : ಸ್ಕೂಟರ್‌ನಲ್ಲೇ ಲಿಪ್‌ ಲಾಕ್‌! ಇದು ಹುಡುಗ-ಹುಡುಗಿ ಕಥೆಯಲ್ಲ, ಇಬ್ಬರು ಹುಡುಗರ ಕಥೆ! - Vistara News

ವೈರಲ್ ನ್ಯೂಸ್

Viral Video : ಸ್ಕೂಟರ್‌ನಲ್ಲೇ ಲಿಪ್‌ ಲಾಕ್‌! ಇದು ಹುಡುಗ-ಹುಡುಗಿ ಕಥೆಯಲ್ಲ, ಇಬ್ಬರು ಹುಡುಗರ ಕಥೆ!

ಉತ್ತರ ಪ್ರದೇಶದಲ್ಲಿ ಚಲಿಸುತ್ತಿದ್ದ ಸ್ಕೂಟರ್‌ ಮೇಲೆ ಇಬ್ಬರು ಯುವಕರು ಲಿಪ್‌ ಲಾಕ್‌ ಮಾಡಿರುವ ವಿಡಿಯೊ ವೈರಲ್‌ (Viral Video) ಆಗಿದೆ. ಪೊಲೀಸರು ಯುವಕರ ಹುಡುಕಾಟದಲ್ಲಿದ್ದಾರೆ.

VISTARANEWS.COM


on

boys liplock
ಮಹತ್ವದ, ಕುತೂಹಲಕರ ಸುದ್ದಿಗಾಗಿ ಫಾಲೊ ಮಾಡಿ
Koo

ಲಕ್ನೋ: ರಸ್ತೆಯಲ್ಲಿ ಗಾಡಿಯಲ್ಲಿ ಹೋಗುವಾಗ ಚೆಲ್ಲಾಟ ಮಾಡಬಾರದು ಎಂದು ಹಲವಾರು ಜಾಗೃತಿ ಅಭಿಯಾನಗಳನ್ನು ನಡೆಸಲಾಗುತ್ತಿರುತ್ತದೆ. ಆದರೂ ಕೆಲವರು ದುಸ್ಸಾಹಸ ಮಾಡುವುದು ತಪ್ಪಿಸುವುದಿಲ್ಲ. ಅದೇ ರೀತಿಯಲ್ಲಿ ಇತ್ತೀಚೆಗೆ ಸ್ಕೂಟರ್‌ನಲ್ಲಿ ಹೋಗುತ್ತಿದ್ದ ಇಬ್ಬರು ಯುವಕರೇ ಲಿಪ್‌ ಲಾಕ್‌ ಮಾಡಿಕೊಂಡಿರುವ ವಿಡಿಯೊವೊಂದು ಸಾಮಾಜಿಕ ಜಾಲತಾಣಗಳಲ್ಲಿ ಹರಿದಾಡಿದ್ದು, ವೈರಲ್‌ (Viral Video) ಆಗಿದೆ.

ಕಪ್ಪು ಬಣ್ಣದ ಸ್ಕೂಟಿಯಲ್ಲಿ ಮೂರು ಯುವಕರು ಹೋಗುತ್ತಿರುತ್ತಾರೆ. ಅದರಲ್ಲಿ ಮಧ್ಯದಲ್ಲಿ ಕುಳಿತ ಯುವಕ ಮತ್ತು ಕೊನೆಯಲ್ಲಿ ಕುಳಿತ ಯುವಕ ಲಿಪ್‌ ಲಾಕ್‌ ಮಾಡಿಕೊಳ್ಳುತ್ತಾರೆ. ಹಿಂದೆ ಕಾರಿನಲ್ಲಿ ಸಂಚರಿಸುತ್ತಿದ್ದವರು ಈ ದೃಶ್ಯವನ್ನು ವಿಡಿಯೊ ಮಾಡಿದ್ದಾರೆ. ಅದನ್ನು ಸಾಮಾಜಿಕ ಜಾಲತಾಣಗಳಲ್ಲಿ ಹರಿಬಿಡಲಾಗಿದೆ. ವಿಡಿಯೊ ನೋಡಿರುವ ನೆಟ್ಟಿಗರು ಹುಡುಗರ ಈ ಆಟಕ್ಕೆ ಬಾಯಿ ತುಂಬಾ ಬೈಯಲಾರಂಭಿಸಿದ್ದಾರೆ. ಹಾಗೆಯೇ ಹುಡುಗ ಹುಡುಗ ಲಿಪ್‌ ಲಾಕ್‌ ಮಾಡಿಕೊಂಡಿರುವ ಬಗ್ಗೆಯೂ ಭಾರಿ ಚರ್ಚೆಯಾಗುತ್ತಿದೆ.

ಇದನ್ನೂ ಓದಿ: Viral Video: ಹೊಸ ಡಾಂಬರು ರಸ್ತೆಯನ್ನು ಬರಿಗೈಯಲ್ಲಿ ಎತ್ತಿ ಹಿಡಿದ ಗ್ರಾಮಸ್ಥರು; ಜರ್ಮನ್ ತಂತ್ರಜ್ಞಾನವಂತೆ!

ಈ ವಿಡಿಯೊವನ್ನು ಕವಿಶ್‌ ಅಜೀಜ್‌ ಹೆಸರಿನ ಟ್ವಿಟರ್‌ ಖಾತೆಯಲ್ಲಿ ಹಂಚಿಕೊಳ್ಳಲಾಗಿದೆ. ಬುಧವಾರ ಹಂಚಿಕೊಳ್ಳಲಾದ ಈ ವಿಡಿಯೊ ಈಗಾಗಲೇ ಲಕ್ಷದಷ್ಟು ಜನರಿಂದ ವೀಕ್ಷಣೆ ಪಡೆದುಕೊಂಡಿದೆ. ಸಾವಿರಾರು ಜನರು ವಿಡಿಯೊವನ್ನು ರಿಟ್ವೀಟ್‌ ಮಾಡಿದ್ದಾರೆ ಕೂಡ.


ವಿಡಿಯೊಗೆ ಹಲವಾರು ರೀತಿಯ ಕಾಮೆಂಟ್‌ಗಳ ಸುರಿಮಳೆ ಬಂದಿದೆ. ರಸ್ತೆ ನಿಯಮಗಳನ್ನು ಗಾಳಿಗೆ ತೂರಿದ ಈ ಮೂರು ಯುವಕರಿಗಾಗಿ ಪೊಲೀಸರು ಹುಡುಕಾಟ ಆರಂಭಿಸಿದ್ದಾರೆ. ಇದು ಉತ್ತರ ಪ್ರದೇಶದ ರಾಮ್‌ಪುರ ಜಿಲ್ಲೆಯಲ್ಲಿ ನಡೆದಿರುವ ಘಟನೆ ಎಂದು ಹೇಳಲಾಗಿದೆ.

ಇದನ್ನೂ ಓದಿ: Viral Video: ಅಂಗ್‌ ಲಗಾ ದೇ ಹಾಡಿಗೆ ಮೈ ಚಳಿ ಬಿಟ್ಟು ಕುಣಿದ ಜೋಡಿ! ವಾವ್‌ ಎನ್ನುತ್ತಿದ್ದಾರೆ ನೆಟ್ಟಿಗರು

ಇತ್ತೀಚೆಗೆ ಗುರುಗ್ರಾಮದಲ್ಲಿ ಇದೇ ರೀತಿಯಲ್ಲಿ ರಸ್ತೆ ನಿಯಮ ಉಲ್ಲಂಘನೆ ಮಾಡಿದ ಘಟನೆಯೊಂದು ನಡೆದಿತ್ತು. ವ್ಯಕ್ತಿಯೊಬ್ಬ ಕಾರಿನ ರೂಫ್‌ ಮೇಲೆ ಕುಳಿತು ಮದ್ಯಪಾನ ಮಾಡಿದ್ದು ಹಾಗೆಯೇ ಪುಷ್‌ ಅಪ್‌ ಸ್ಟಂಟ್‌ ಮಾಡಿದ್ದ ವಿಡಿಯೊ ವೈರಲ್‌ ಆಗಿತ್ತು. ಕಾರಿನಲ್ಲಿದ್ದ ಇತರರು ಕಾರಿನ ಕಿಟಕಿಯಿಂದ ಹೊರಬಂದು ಆತನಿಗೆ ಪ್ರೋತ್ಸಾಹಿಸಿದ್ದು ಕೂಡ ವಿಡಿಯೊದಲ್ಲಿ ಸೆರೆಯಾಗಿತ್ತು. ಆ ಕಾರಿನ ಮಾಲೀಕನಿಗೆ 6,500 ರೂ. ದಂಡ ವಿಧಿಸಿದ್ದ ಗುರುಗ್ರಾಮದ ಪೊಲೀಸರು, ಪುಷ್‌ಅಪ್‌ ಮಾಡಿದವನನ್ನು ಬಂಧಿಸಿದ್ದರು.

ಕ್ಷಣ ಕ್ಷಣದ ಮಾಹಿತಿಗಾಗಿ Vistara News FaceBook ಪೇಜ್ ಫಾಲೋ ಮಾಡಿ
ಮಹತ್ವದ ಮಾಹಿತಿಗಾಗಿ ವಿಸ್ತಾರ ನ್ಯೂಸ್ ಆ್ಯಪ್ ಉಚಿತವಾಗಿ ಡೌನ್ ಲೋಡ್ ಮಾಡಿಕೊಳ್ಳಿ: Andriod App | IOS App
Continue Reading
Click to comment

Leave a Reply

Your email address will not be published. Required fields are marked *

ದೇಶ

Viral Video: ಜೊತೆಗಿದ್ದ ಬೆಂಬಲಿಗನನ್ನೇ ವೇದಿಕೆಯಿಂದ ತಳ್ಳಿದ ಲಾಲೂ ಪುತ್ರ; ಎಲ್ಲೆಡೆ ಭಾರೀ ಖಂಡನೆ

Viral Video:ಇಂದು ನಾಮಪತ್ರ ಸಲ್ಲಿಸಿದ್ದ ಮೀಸಾ ತಮ್ಮ ಸಹೋದರ ತೇಜ್‌ ಪ್ರತಾಪ್‌ ಜೊತೆಗೆ ವೇದಿಕೆಗೆ ಆಗಮಿಸಿದ್ದರು. ಈ ವೇಳೆ ಹಸಿರು ಕ್ಯಾಪ್‌ ಧರಿಸಿದ ಅನೇಕ ಕಾರ್ಯಕರ್ತರು ಅವರನ್ನು ಸುತ್ತುವರಿದರು. ಆಗ ಕೋಪಗೊಂಡ ತೇಜ್‌ ಪ್ರತಾಪ್‌ ಯಾದವ್‌, ತನ್ನ ಪಕ್ಕದಲ್ಲಿ ನಿಂತಿದ್ದ ವ್ಯಕ್ತಿಯನ್ನು ತಳ್ಳಿ ಬೀಳಿಸಿದ್ದಾರೆ. ತಕ್ಷಣ ಅಲ್ಲಿದ್ದ ಜನ ಆತನನ್ನು ವೇದಿಕೆಯಿಂದ ಕರೆದೊಯ್ದಿದ್ದಾರೆ. ಪಕ್ಕದಲ್ಲೇ ಇದ್ದ ಮೀಸಾ , ತೇಜ್‌ ಪ್ರತಾಪ್‌ನನ್ನು ಸಮಾಧಾನಪಡಿಸಿದರು.

VISTARANEWS.COM


on

Viral Video
Koo

ನವದೆಹಲಿ: ರಾಷ್ಟ್ರೀಯ ಜನತಾ ದಳ(RJD) ಮುಖ್ಯಸ್ಥ ಲಾಲೂ ಪ್ರಸಾದ್‌ ಯಾದವ್‌(Lalu Prasad Yadav) ಪುತ್ರ ತೇಜ್‌ ಪ್ರತಾಪ್‌ ಯಾದವ್‌(Tej Pratap Yadav) ಮತ್ತೆ ವಿವಾದಕ್ಕೀಡಾಗುವ ಮೂಲಕ ಸುದ್ದಿಯಲ್ಲಿದ್ದಾರೆ. ಲೋಕಸಭಾ ಚುನಾವಣೆಯಲ್ಲಿ(Lok Sabha Election 2024)ಪಾಟಲೀಪುರದಿಂದ ಕಣಕ್ಕಿಳಿಸಿರುವ ಸಹೋದರಿ ಮೀಸಾ ಭಾರತಿ ಪರ ಪ್ರಚಾರಕ್ಕೆಂದು ಆಗಮಿಸಿದ್ದ ತೇಜ್‌ ಪ್ರತಾಪ್‌ ಯಾದವ್‌ ಜೊತೆಗಿದ್ದ ಬೆಂಬಲಿಗನನ್ನು ವೇದಿಕೆಯಿಂದ ತಳ್ಳುವ ಮೂಲಕ ದರ್ಪ ಮೆರೆದಿದ್ದಾರೆ. ಇದೀಗ ಈ ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ ವೈರಲ್‌(Viral Video) ಆಗಿದ್ದು, ಹಲವರಿಂದ ಖಂಡನೆ ವ್ಯಕ್ತವಾಗಿದೆ.

ವಿಡಿಯೋದಲ್ಲಿ ಏನಿದೆ?

ಇಂದು ನಾಮಪತ್ರ ಸಲ್ಲಿಸಿದ್ದ ಮೀಸಾ ತಮ್ಮ ಸಹೋದರ ತೇಜ್‌ ಪ್ರತಾಪ್‌ ಜೊತೆಗೆ ವೇದಿಕೆಗೆ ಆಗಮಿಸಿದ್ದರು. ಈ ವೇಳೆ ಹಸಿರು ಕ್ಯಾಪ್‌ ಧರಿಸಿದ ಅನೇಕ ಕಾರ್ಯಕರ್ತರು ಅವರನ್ನು ಸುತ್ತುವರಿದರು. ಆಗ ಕೋಪಗೊಂಡ ತೇಜ್‌ ಪ್ರತಾಪ್‌ ಯಾದವ್‌, ತನ್ನ ಪಕ್ಕದಲ್ಲಿ ನಿಂತಿದ್ದ ವ್ಯಕ್ತಿಯನ್ನು ತಳ್ಳಿ ಬೀಳಿಸಿದ್ದಾರೆ. ತಕ್ಷಣ ಅಲ್ಲಿದ್ದ ಜನ ಆತನನ್ನು ವೇದಿಕೆಯಿಂದ ಕರೆದೊಯ್ದಿದ್ದಾರೆ. ಪಕ್ಕದಲ್ಲೇ ಇದ್ದ ಮೀಸಾ , ತೇಜ್‌ ಪ್ರತಾಪ್‌ನನ್ನು ಸಮಾಧಾನಪಡಿಸಿದರು. ಈ ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ ವೈರಲ್‌ ಆಗುತ್ತಿದ್ದಂತೆ ಅನೇಕರು ಖಂಡನೆ ವ್ಯಕ್ತಪಡಿಸಿದ್ದಾರೆ. ತೇಜ್‌ ಪ್ರತಾಪ್‌ ವರ್ತನೆಗೆ ಖಂಡನೆ ವ್ಯಕ್ತಪಡಿಸಿರುವ ಬಿಜೆಪಿ ನಾಯಕ ಪ್ರೀತಿ ಗಾಂಧಿ, ತೇಜ್‌ ಪ್ರತಾಪ್‌ ಯಾವುದಕ್ಕೂ ಅರ್ಹನಲ್ಲ. ಸ್ವಪಕ್ಷ ಕಾರ್ಯಕರ್ತನ ಮೇಲೆಯೇ ಬಹಳ ಕ್ರೂರವಾಗಿ ಹಲ್ಲೆ ಮಾಡುತ್ತಾರೆ. ಇದು ಮಾತು ಮತ್ತು ಕೃತಿಗಿರುವ ವ್ಯತ್ಯಾಸ ಎಂದು ಕಿಡಿ ಕಾರಿದ್ದಾರೆ.

ಆಂಧ್ರ ಪ್ರದೇಶದ ಗುಂಟೂರು ಜಿಲ್ಲೆಯಲ್ಲೂ ಇಂತಹದ್ದೇ ಒಂದು ಘಟನೆ ನಡೆದಿದ್ದು, ತೆನಾಲಿ ಮತಗಟ್ಟೆಯಲ್ಲಿ ಮತ ಚಾಲಾಯಿಸಲೆಂದು ಸಾಲಿನಲ್ಲಿ ನಿಂತಿದ್ದ ಮತದಾರನಿಗೆ ಜಗನ್‌ ಮೋಹನ್‌ ರೆಡ್ಡಿ ನೇತೃತ್ವದ ವೈಎಸ್‌ಆರ್‌ ಕಾಂಗ್ರೆಸ್‌ ಅಭ್ಯರ್ಥಿ, ತೆನಾಲಿ ಕ್ಷೇತ್ರದ ಶಾಸಕ ಅನ್ನಬತುನಿ ಶಿವಕುಮಾರ್ ಎಂಬುವವರು ಕಪಾಳಮೋಕ್ಷ ಮಾಡಿದ್ದಾರೆ. ಶಾಸಕ ಶಿವಕುಮಾರ್ ಇಂದು ಮತದಾನಕ್ಕೆಂದು ಮತಗಟ್ಟೆಗೆ ಆಗಮಿಸಿದ್ದರು. ಈ ವೇಳೆ ನೂರಾರು ಜನ ಸಾಲಿನಲ್ಲಿ ನಿಂತಿದ್ದರೂ ಅದನು ಲೆಕ್ಕಿಸದೇ ಸಾಲು ತಪ್ಪಿಸಿ ನೇರವಾಗಿ ಮತಗಟ್ಟೆಯೊಳಗೆ ಪ್ರವೇಶಿಸಲು ಯತ್ನಿಸಿದ್ದಾರೆ. ಈ ವೇಳೆ ಇದನ್ನು ಕಂಡ ಮತದಾರನೊಬ್ಬ ಶಾಸಕರ ಈ ನಡೆಗೆ ಆಕ್ಷೇಪ ವ್ಯಕ್ತಪಡಿಸಿದ್ದರು. ಸಾಲಿನಲ್ಲೇ ನಿಂತು ಮತ ಚಲಾಯಿಸುವಂತೆ ಆತ ಒತ್ತಾಯಿಸಿದ್ದ. ಇದರಿಂದ ಆಕ್ರೋಶಗೊಂಡ ಶಾಸಕ ಶಿವಕುಮಾರ್ ನೋಡ ನೋಡುತ್ತಲೇ ಪ್ರಶ್ನಿಸಿದ ಮತದಾರನ ಕಪಾಳಕ್ಕೆ ಹೊಡೆದಿದ್ದಾರೆ.

ಇದನ್ನೂ ಓದಿ:Viral Video: ವಂದೇ ಭಾರತ್ ರೈಲಿನಡಿ ಸಿಲುಕಿದರೂ ಹಸು ಪ್ರಾಣಾಪಾಯದಿಂದ ಪಾರಾಗಿದ್ದು ಹೇಗೆ?

ಏಟು ಬೀಳುತ್ತಿದ್ದಂತೆ ಮತದಾರನೂ ತಿರುಗಿ ಶಾಸಕನ ಕಪಾಳಕ್ಕೆ ಹೊಡೆದಿದ್ದಾನೆ. ಇದರ ಬೆನ್ನಲ್ಲೇ ಶಿವಕುಮಾರ್ ಜೊತೆಗಿದ್ದ ಆತನ ಬೆಂಬಲಿಗರು ಹಿಂದೆ ಮುಂದೆ ನೋಡದೆ ಮತದಾರನ ಮೇಲೆ ಮುಗಿಬಿದ್ದು ಸಾಮೂಹಿಕ ಹಲ್ಲೆ ನಡೆಸಿದ್ದಾರೆ. ಅಲ್ಲದೆ ಮತದಾರನನ್ನು ಹೊರಗೆ ಎಳೆದೊಯ್ದಿದ್ದಾರೆ. ಈ ವೇಳೆ ಭದ್ರತೆಗೆ ನಿಯೋಜಿಸಿದ್ದ ಪೊಲೀಸರು ಮಧ್ಯ ಪ್ರವೇಶಿಸಿ ಗಲಾಟೆ ನಿಯಂತ್ರಿಸಿದ್ದಾರೆ. ಸ್ಥಳದಲ್ಲಿ ಕೆಲಹೊತ್ತು ಭಾರೀ ಬಿಗುವಿನ ವಾತಾವರಣ ಸೃಷ್ಟಿಯಾಗಿತ್ತು.

Continue Reading

ದೇಶ

Madhavi Latha: ಮತಗಟ್ಟೆಯಲ್ಲಿ ಮುಸ್ಲಿಂ ಮಹಿಳೆಯರ ಬುರ್ಖಾ ತೆಗೆಸಿ ಐಡಿ ಕಾರ್ಡ್‌ ಚೆಕ್‌ ಮಾಡಿದ ಬಿಜೆಪಿ ಅಭ್ಯರ್ಥಿ ಮಾಧವಿ ಲತಾ!

Madhavi Latha:ಹೈದರಾಬಾದ್‌ನಲ್ಲಿ ಓವೈಸಿ ವಿರುದ್ಧ ಕಣಕ್ಕಿಳಿದಿರುವ ಲತಾ, ಇಂದು ಅಜಂಪುರದಲ್ಲಿರುವ ಅಮೃತ ವಿದ್ಯಾಲಯ ಮತಗಟ್ಟೆಯಲ್ಲಿ ಮತದಾನ ಮಾಡಿದ ಬಳಿಕ ವಿವಿಧ ಮತಗಟ್ಟೆಗಳಿಗೆ ಭೇಟಿ ಕೊಟ್ಟಿದ್ದರು. ಈ ವೇಳೆ ಮತಗಟ್ಟೆಯಲ್ಲಿ ಮತದಾನಕ್ಕಾಗಿ ಕಾದು ಕುಳಿತಿದ್ದ ಮುಸ್ಲಿಂ ಮಹಿಳೆಯ ಬಳಿ ಬಂದ ಲತಾ, ಮುಖಕ್ಕೆ ಧರಿಸಿದ್ದ ಹಿಜಾಬ್‌ ತೆಗೆಯುವಂತೆ ಹೇಳಿ ಅವರ ಗುತುತಿನ ಚೀಟಿ ಪರಿಶೀಲನೆ ಮಾಡಿದರು. ಅದೂ ಅಲ್ಲದೇ ಸರಿಯಾದ ರೀತಿಯಲ್ಲಿ ಪರಿಶೀಲನೆ ನಡೆದ ಬಳಿಕಷ್ಟೇ ಮತದಾನಕ್ಕೆ ಅವಕಾಶ ಮಾಡಿಕೊಡುವಂತೆ ಅಲ್ಲಿನ ಅಧಿಕಾರಿಗಳಿಗೆ ಆಕೆ ಸೂಚಿಸಿದ್ದಾರೆ. ಇನ್ನು ಇದೇ ವೇಳೆ ಮತಪಟ್ಟಿಯಲ್ಲಿ ಮತದಾರರ ಹೆಸರು ಮಿಸ್‌ ಆಗಿವೆ ಎಂದು ಹೇಳಿದ್ದಾರೆ.

VISTARANEWS.COM


on

Madhavi Latha
Koo

ಹೈದರಾಬಾದ್‌: ಲೋಕಸಭಾ ಚುನಾವಣೆ(Lok Sabha Election 2024)ಯ ನಾಲ್ಕನೇ ಹಂತದ ಮತದಾನ ಪ್ರಕ್ರಿಯೆ ಇಂದು ನಡೆಯುತ್ತಿದೆ. ಈ ನಡುವೆ ಕೆಲವೊಂದು ಕಡೆ ಅಭ್ಯರ್ಥಿಗಳಿಂದ ಎಡವಟ್ಟುಗಳೂ ನಡೆದಿವೆ. ಹೈದರಾಬಾದ್‌ ಬಿಜೆಪಿ ಲೋಕಸಭಾ ಅಭ್ಯರ್ಥಿ ಮಾಧವಿ ಲತಾ(Madhavi Latha) ಮತಗಟ್ಟೆಯಲ್ಲಿ ಬುರ್ಖಾ ಧರಿಸಿದ್ದ ಮತದಾರರ ಗುರುತಿನ ಚೀಟಿ ಪರಿಶೀಲನೆ ಮಾಡಿ ವಿವಾದಕ್ಕೀಡಾಗಿದ್ದಾರೆ. ಈ ವಿಡಿಯೋ ವೈರಲ್‌(Viral Video) ಆಗಿದ್ದು, ಪ್ರತಿಸ್ಪರ್ಧಿ ಎಐಎಂಐಎಂ ಪಕ್ಷ(AIMIM) ಮುಖಂಡ ಅಸಾದುದ್ದೀನ್‌ ಓವೈಸಿ(Asaduddin Owaisi) ಚುನಾವಣಾ ಆಯೋಗಕ್ಕೆ (Election Commission of India) ದೂರು ನೀಡಿದ್ದಾರೆ.

ಘಟನೆ ವಿವರ:

ಹೈದರಾಬಾದ್‌ನಲ್ಲಿ ಓವೈಸಿ ವಿರುದ್ಧ ಕಣಕ್ಕಿಳಿದಿರುವ ಲತಾ, ಇಂದು ಅಜಂಪುರದಲ್ಲಿರುವ ಅಮೃತ ವಿದ್ಯಾಲಯ ಮತಗಟ್ಟೆಯಲ್ಲಿ ಮತದಾನ ಮಾಡಿದ ಬಳಿಕ ವಿವಿಧ ಮತಗಟ್ಟೆಗಳಿಗೆ ಭೇಟಿ ಕೊಟ್ಟಿದ್ದರು. ಈ ವೇಳೆ ಮತಗಟ್ಟೆಯಲ್ಲಿ ಮತದಾನಕ್ಕಾಗಿ ಕಾದು ಕುಳಿತಿದ್ದ ಮುಸ್ಲಿಂ ಮಹಿಳೆಯ ಬಳಿ ಬಂದ ಲತಾ, ಮುಖಕ್ಕೆ ಧರಿಸಿದ್ದ ಹಿಜಾಬ್‌ ತೆಗೆಯುವಂತೆ ಹೇಳಿ ಅವರ ಗುತುತಿನ ಚೀಟಿ ಪರಿಶೀಲನೆ ಮಾಡಿದರು. ಅದೂ ಅಲ್ಲದೇ ಸರಿಯಾದ ರೀತಿಯಲ್ಲಿ ಪರಿಶೀಲನೆ ನಡೆದ ಬಳಿಕಷ್ಟೇ ಮತದಾನಕ್ಕೆ ಅವಕಾಶ ಮಾಡಿಕೊಡುವಂತೆ ಅಲ್ಲಿನ ಅಧಿಕಾರಿಗಳಿಗೆ ಆಕೆ ಸೂಚಿಸಿದ್ದಾರೆ. ಇನ್ನು ಇದೇ ವೇಳೆ ಮತಪಟ್ಟಿಯಲ್ಲಿ ಮತದಾರರ ಹೆಸರು ಮಿಸ್‌ ಆಗಿವೆ ಎಂದು ಹೇಳಿದ್ದಾರೆ.

ಮಾಧವಿ ಲತಾ ಅವರು ವಿವಾದಕ್ಕೀಡಾಗುತ್ತಿರುವುದು ಇದೇ ಮೊದಲೇನಲ್ಲ. ಕೆಲ ದಿನಗಳ ಹಿಂದೆ ಹೈದರಾಬಾದ್ ನಲ್ಲಿ ನಡೆದ ರಾಮನವಮಿಯ ಮೆರವಣಿಗೆ ಸಂದರ್ಭದಲ್ಲಿ ಹೈದರಾಬಾದ್‌ನ ಓಲ್ಡ್ ಸಿಟಿಯಲ್ಲಿರುವ ಸಿದ್ದಿಯಂಬರ್ ಬಜಾರ್ ಮಸೀದಿಯತ್ತ ಮಾಧವಿ ಲತಾ ಅವರು ಬಾಣ ಬಿಟ್ಟಂತೆ ಸನ್ನೆ ಮಾಡುವ ಮೂಲಕ ಸುದ್ದಿಯಾಗಿದ್ದರು.
ಈ ಕುರಿತ ವಿಡಿಯೋ ಸಾಮಾಜಿಕ ಜಾಲತಾಣಗಳಲ್ಲಿ ಭಾರೀ ವೈರಲ್ ಆಗಿದ್ದು, ಮಾಧವಿ ಲತಾ ಅವರು ಕೇಸರಿ ಶಾಲು ಧರಿಸಿ ವಾಹನವೊಂದರ ಮೇಲೆ ನಿಂತು ಮಸೀದಿಯತ್ತ ಬಾಣ ಬಿಟ್ಟಂತೆ ಸನ್ನೆ ಮಾಡಿರುವುದು ಮತ್ತು ಸುತ್ತಲು ಕೇಸರಿ ಧ್ವಜ ಹಿಡಿದು ನಿಂತಿದ್ದ ನೂರಾರು ಜನರು ಚಪ್ಪಾಳೆ ತಟ್ಟಿ ಹರ್ಷೋದ್ಘಾರ ಮೊಳಗಿಸಿದ್ದು ವೈರಲ್ ವಿಡಿಯೋದಲ್ಲಿತ್ತು.

ಇದನ್ನೂ ಓದಿ: Viral Video: ಸಾಲಿನಲ್ಲಿ ಬನ್ನಿ ಅಂದಿದ್ದೇ ತಪ್ಪಾಯ್ತಾ? ಮತದಾರನಿಗೆ MLA ಕಪಾಳಮೋಕ್ಷ

ಇನ್ನು ಸಾಮಾಜಿಕ ಜಾಲತಾಣಗಳಲ್ಲಿ ವಿಡಿಯೋ ವೈರಲ್ ಆಗುತ್ತಲೇ ಬಿಜೆಪಿ ಅಭ್ಯರ್ಥಿ ಮಾಧವಿ ಲತಾ ಸ್ಪಷ್ಟನೆ ನೀಡಿದ್ದು, ‘ತಪ್ಪು ಭಾವನೆ ಮೂಡಿಸಲು ನನ್ನ ವಿಡಿಯೋವೊಂದನ್ನು ಮಾಧ್ಯಮಗಳಲ್ಲಿ ಹಂಚಿಕೊಳ್ಳುತ್ತಿರುವುದು ನನ್ನ ಗಮನಕ್ಕೆ ಬಂದಿದೆ. ಇದು ಅಪೂರ್ಣ ವಿಡಿಯೋ ಎಂಬುವುದನ್ನು ನಾನು ಸ್ಪಷ್ಟಪಡಿಸಲು ಇಚ್ಚಿಸುತ್ತೇನೆ. ಈ ವಿಡಿಯೋದಿಂದ ಯಾರ ಭಾವನೆಗಾದರು ಧಕ್ಕೆಯಾಗಿದ್ದರೆ, ನಾನು ಎಲ್ಲರನ್ನು ಗೌರವಿಸುವವಳಾಗಿ ಕ್ಷಮೆ ಯಾಚಿಸುತ್ತೇನೆ” ಎಂದು ಟ್ವೀಟ್ ಮಾಡಿದ್ದರು.

Continue Reading

ಬೆಂಗಳೂರು

Cubbon park: ಕಬ್ಬನ್‌ ಪಾರ್ಕ್‌ನಲ್ಲಿ ಯುವಕನನ್ನು ಅಟ್ಟಾಡಿಸಿ ಚಪ್ಪಲಿಯಿಂದ ಹೊಡೆದ ಮಹಿಳೆಯರು!

Cubbon park : ಪಾರ್ಕಿಂಗ್‌ ಜಾಗದಲ್ಲಿ ಕಾರು ತೆಗೆಯುವ ವಿಚಾರಕ್ಕೆ ಶುರುವಾದ ಗಲಾಟೆಯು ವಿಕೋಪಕ್ಕೆ ತಿರುಗಿದೆ. ಕಾರಲ್ಲಿದ್ದ ಮಹಿಳೆಯರಿಬ್ಬರು ಯುವಕನನ್ನು ಅಟ್ಟಾಡಿಸಿಕೊಂಡು ಚಪ್ಪಲಿಯಿಂದ ಹೊಡೆದು ಅವಮಾನಿಸಿದ್ದಾರೆ. ಇತ್ತ ಮಹಿಳೆಯರ ಗೂಂಡಾ ವರ್ತನೆಗೆ ಸಾರ್ವಜನಿಕರು ಆಕ್ರೋಶ (Assault case) ಹೊರಹಾಕಿದ್ದಾರೆ.

VISTARANEWS.COM


on

By

Assault case Cubbon park
Koo

ಬೆಂಗಳೂರು: ಸಣ್ಣದಾಗಿ ಶುರುವಾದ ಜಗಳವು ಹೊಡಿಬಡಿ ಹಂತಕ್ಕೆ ತಲುಪಿತ್ತು. ಮಹಿಳೆಯರಿಬ್ಬರು ನಡುರಸ್ತೆಯಲ್ಲೇ ಯುವಕನಿಗೆ ಹಿಗ್ಗಾಮುಗ್ಗಾ ಥಳಿಸಿರುವ (Assault Case) ಘಟನೆ ಬೆಂಗಳೂರಲ್ಲಿ ನಡೆದಿದೆ. ಮಹಿಳೆಯರ ವಿರುದ್ಧ ಅಲ್ಲಿದ್ದ ಪುರುಷರು ತಿರುಗಿ ಬಿದ್ದಿದ್ದರು. ಮೂರು ದಿನಗಳ ಹಿಂದೆ ಬೆಂಗಳೂರಿನ ಕಬ್ಬನ್ ಪಾರ್ಕ್‌ನಲ್ಲಿ (cubbon park) ಈ ಘಟನೆ ನಡೆದಿದೆ.

ಕಬ್ಬನ್‌ ಪಾರ್ಕ್‌ನಲ್ಲಿ ಯುವಕನೊಬ್ಬ ಪಾರ್ಕಿಂಗ್‌ ಜಾಗದಿಂದ ಕಾರು ತೆಗೆಯುತ್ತಿದ್ದ. ಇದೇ ವೇಳೆ ಮಹಿಳೆಯರಿಬ್ಬರು ಇದ್ದ ಕಾರು ಮುಂದಿನಿಂದ ಬಂದಿದೆ. ಈ ವಿಚಾರಕ್ಕೆ ಯುವಕನೊಂದಿಗೆ ಮಹಿಳೆಯರು ವಾಗ್ವಾದಕ್ಕೆ ಇಳಿದಿದ್ದರು. ಮಾತು ವಿಕೋಪಕ್ಕೆ ತಿರುಗಿದ್ದು, ಯುವಕನ ತಪ್ಪಿಲ್ಲದಿದ್ದರು ಮಹಿಳೆಯರಿಬ್ಬರು ಅಟ್ಟಾಡಿಸಿಕೊಂಡು ಹೊಡೆದು ಹಲ್ಲೆ ಮಾಡಿದ್ದಾರೆ.

ಮಾತ್ರವಲ್ಲದೆ ಮಹಿಳೆಯರಿಬ್ಬರು ಯುವಕನಿಗೆ ಚಪ್ಪಲಿಯಿಂದ ಹೊಡೆದು ಅವಮಾನ ಮಾಡಿದ್ದಾರೆ. ಇತ್ತ ಮಹಿಳೆಯರ ವರ್ತನೆಗೆ ಅಲ್ಲಿದ್ದವರು ಆಕ್ರೋಶ ಹೊರಹಾಕಿದರು. ಮಹಿಳೆಯರ ಗೂಂಡಾ ವರ್ತನೆಗೆ ಸಿಟ್ಟಾಗಿ ನಂತರ ಯುವಕನ ಪರವಾಗಿ ನಿಂತಿದ್ದಾರೆ. ಮಹಿಳೆಯರ ಹಾರಾಟ ಹಾಗೂ ಚಿರಾಟಕ್ಕೆ ಸಾರ್ವಜನಿಕರು ವಾಪಾಸ್‌ ತರಾಟೆಗೆ ತೆಗೆದುಕೊಂಡಿದ್ದಾರೆ.

ಇದನ್ನೂ ಓದಿ: Narendra Modi: ಗುರುದ್ವಾರದಲ್ಲಿ ಅಡುಗೆ ಮಾಡಿ ಭಕ್ತರಿಗೆ ಬಡಿಸಿದ ಪ್ರಧಾನಿ; ವಿಡಿಯೋ ವೈರಲ್‌

ಸಾಲಿನಲ್ಲಿ ಬನ್ನಿ ಅಂದಿದ್ದೇ ತಪ್ಪಾಯ್ತಾ? ಮತದಾರನಿಗೆ MLA ಕಪಾಳಮೋಕ್ಷ

ಹೈದರಾಬಾದ್‌: ಕೆಲವೊಮ್ಮೆ ಜನಪ್ರತಿನಿಧಿ(Politicians)ಗಳು ತಾವು ಜನಸೇವಕರು ಎಂಬುದನ್ನೇ ಮರೆತು ದರ್ಪದಿಂದ ವರ್ತಿಸುವ ಘಟನೆ ಆಗಾಗ ಕಣ್ಣ ಮುಂದೆ ಬರುತ್ತಲೇ ಇರುತ್ತವೆ. ಇದೀಗ ಅಂತಹದ್ದೇ ಒಂದು ಘಟನೆ ಆಂಧ್ರ ಪ್ರದೇಶದಲ್ಲಿ(Andra Pradesh) ನಡೆದಿದ್ದು, ಮತದಾರನ ಮೇಲೆ ಶಾಸಕ(Andra Pradesh MLA)ನೋರ್ವ ದರ್ಪ ಮೆರೆದಿದ್ದು, ಕಪಾಳಮೋಕ್ಷ ಮಾಡಿದ್ದಾರೆ. ಈ ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ ವೈರಲ್‌ (Viral Video) ಆಗುತ್ತಿದ್ದು, ಹಲವರಿಂದ ಖಂಡನೆ ವ್ಯಕ್ತವಾಗಿದೆ.

ಏನಿದು ಘಟನೆ?

ಆಂಧ್ರ ಪ್ರದೇಶದ ಗುಂಟೂರು ಜಿಲ್ಲೆಯ ತೆನಾಲಿ ಮತಗಟ್ಟೆಯೊಂದರಲ್ಲಿ ಈ ಘಟನೆ ನಡೆದಿದೆ. ಮತ ಚಾಲಾಯಿಸಲೆಂದು ಸಾಲಿನಲ್ಲಿ ನಿಂತಿದ್ದ ಮತದಾರನಿಗೆ ಜಗನ್‌ ಮೋಹನ್‌ ರೆಡ್ಡಿ ನೇತೃತ್ವದ ವೈಎಸ್‌ಆರ್‌ ಕಾಂಗ್ರೆಸ್‌ ಅಭ್ಯರ್ಥಿ, ತೆನಾಲಿ ಕ್ಷೇತ್ರದ ಶಾಸಕ ಅನ್ನಬತುನಿ ಶಿವಕುಮಾರ್ ಎಂಬುವವರು ಕಪಾಳಮೋಕ್ಷ ಮಾಡಿದ್ದಾನೆ. ಶಾಸಕ ಶಿವಕುಮಾರ್ ಇಂದು ಮತದಾನಕ್ಕೆಂದು ಮತಗಟ್ಟೆಗೆ ಆಗಮಿಸಿದ್ದರು. ಈ ವೇಳೆ ನೂರಾರು ಜನ ಸಾಲಿನಲ್ಲಿ ನಿಂತಿದ್ದರೂ ಅದನು ಲೆಕ್ಕಿಸದೇ ಸಾಲು ತಪ್ಪಿಸಿ ನೇರವಾಗಿ ಮತಗಟ್ಟೆಯೊಳಗೆ ಪ್ರವೇಶಿಸಲು ಯತ್ನಿಸಿದ್ದಾರೆ. ಈ ವೇಳೆ ಇದನ್ನು ಕಂಡ ಮತದಾರನೊಬ್ಬ ಶಾಸಕರ ಈ ನಡೆಗೆ ಆಕ್ಷೇಪ ವ್ಯಕ್ತಪಡಿಸಿದ್ದರು. ಸಾಲಿನಲ್ಲೇ ನಿಂತು ಮತ ಚಲಾಯಿಸುವಂತೆ ಆತ ಒತ್ತಾಯಿಸಿದ್ದ. ಇದರಿಂದ ಆಕ್ರೋಶಗೊಂಡ ಶಾಸಕ ಶಿವಕುಮಾರ್ ನೋಡ ನೋಡುತ್ತಲೇ ಪ್ರಶ್ನಿಸಿದ ಮತದಾರನ ಕಪಾಳಕ್ಕೆ ಹೊಡೆದಿದ್ದಾರೆ.

ಮತದಾರರನಿಗೆ ಕಪಾಳಮೋಕ್ಷ ಮಾಡಿರುವ ಬೆನ್ನಲ್ಲೇ ಶಿವಕುಮಾರ್ ಜೊತೆಗಿದ್ದ ಆತನ ಬೆಂಬಲಿಗರು ಹಿಂದೆ ಮುಂದೆ ನೋಡದೆ ಮತದಾರನ ಮೇಲೆ ಮುಗಿಬಿದ್ದು ಸಾಮೂಹಿಕ ಹಲ್ಲೆ ನಡೆಸಿದ್ದಾರೆ. ಅಲ್ಲದೆ ಮತದಾರನನ್ನು ಹೊರಗೆ ಎಳೆದೊಯ್ದಿದ್ದಾರೆ. ಈ ವೇಳೆ ಭದ್ರತೆಗೆ ನಿಯೋಜಿಸಿದ್ದ ಪೊಲೀಸರು ಮಧ್ಯ ಪ್ರವೇಶಿಸಿ ಗಲಾಟೆ ನಿಯಂತ್ರಿಸಿದ್ದಾರೆ. ಸ್ಥಳದಲ್ಲಿ ಕೆಲಹೊತ್ತು ಭಾರೀ ಬಿಗುವಿನ ವಾತಾವರಣ ಸೃಷ್ಟಿಯಾಗಿತ್ತು. ಇನ್ನ ಈ ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ ವೈರಲ್‌ ಆಗುತ್ತಿದ್ದಂತೆ ಟಿಡಿಪಿ ಪ್ರತಿಕ್ರಿಯಿಸಿದ್ದು, ವೈಎಸ್‌ಆರ್‌ ಕಾಂಗ್ರೆಸ್‌ ಪಕ್ಷಕ್ಕೆ ಸೋಲು ಖಚಿತ ಎಂಬುದು ಸ್ಪಷ್ಟವಾಗಿದೆ. ಆ ಹತಾಶೆಯಲ್ಲಿ ಈ ರೀತಿ ಮಾಡುತ್ತಿದ್ದಾರೆ ಎಂದು ಟೀಕಿಸಿದೆ. ಇನ್ನು ಈ ಘಟನೆ ಬಗ್ಗೆ ಪ್ರತಿಕ್ರಿಯಿಸಲು ವೈಎಸ್‌ಆರ್‌ ಕಾಂಗ್ರೆಸ್‌ ನಿರಾಕರಿಸಿದೆ. ಘಟನೆಗೆ ಸಂಬಂಧಿಸಿದಂತೆ ಟಿಡಿಪಿ ಮತ್ತು ವೈಎಸ್‌ಆರ್‌ ಕಾಂಗ್ರೆಸ್‌ ನಡುವೆ ವಾಕ್ಸಮರ ಮುಂದುವರೆದಿದೆ.

ಇತ್ತೀಚೆಗೆ ಬಿಜೆಪಿ ಮುಖಂಡ, ನಟಿ ಅಮೂಲ್ಯ ಮಾವ ರಾಮಚಂದ್ರ ಅವರು ಕೂಡ ಸಾರ್ವಜನಿಕ ಸ್ಥಳದಲ್ಲಿ ತಮ್ಮ ಬೆಂಬಲಿಗರಿಗೆ ಕಪಾಳಮೋಕ್ಷ ಮಾಡಿದ್ದರು.

ಈ ಸಂಗತಿಯ ಕುರಿತು ನಿಮ್ಮ ಅನಿಸಿಕೆ ಏನು? ಕಾಮೆಂಟ್ ಮೂಲಕ ತಿಳಿಸಿ

Continue Reading

ದೇಶ

Viral Video: ಸಾಲಿನಲ್ಲಿ ಬನ್ನಿ ಅಂದಿದ್ದೇ ತಪ್ಪಾಯ್ತಾ? ಮತದಾರನಿಗೆ MLA ಕಪಾಳಮೋಕ್ಷ

Viral Video: ಮತ ಚಾಲಾಯಿಸಲೆಂದು ಸಾಲಿನಲ್ಲಿ ನಿಂತಿದ್ದ ಮತದಾರನಿಗೆ ಜಗನ್‌ ಮೋಹನ್‌ ರೆಡ್ಡಿ ನೇತೃತ್ವದ ವೈಸಿಪಿ ಪಕ್ಷದ ಅಭ್ಯರ್ಥಿ, ತೆನಾಲಿ ಕ್ಷೇತ್ರದ ಶಾಸಕ ಅನ್ನಬತುನಿ ಶಿವಕುಮಾರ್ ಎಂಬುವವರು ಕಪಾಳಮೋಕ್ಷ ಮಾಡಿದ್ದಾನೆ. ಶಾಸಕ ಶಿವಕುಮಾರ್ ಇಂದು ಮತದಾನಕ್ಕೆಂದು ಮತಗಟ್ಟೆಗೆ ಆಗಮಿಸಿದ್ದರು. ಈ ವೇಳೆ ನೂರಾರು ಜನ ಸಾಲಿನಲ್ಲಿ ನಿಂತಿದ್ದರೂ ಅದನು ಲೆಕ್ಕಿಸದೇ ಸಾಲು ತಪ್ಪಿಸಿ ನೇರವಾಗಿ ಮತಗಟ್ಟೆಯೊಳಗೆ ಪ್ರವೇಶಿಸಲು ಯತ್ನಿಸಿದ್ದಾರೆ. ಈ ವೇಳೆ ಇದನ್ನು ಕಂಡ ಮತದಾರನೊಬ್ಬ ಶಾಸಕರ ಈ ನಡೆಗೆ ಆಕ್ಷೇಪ ವ್ಯಕ್ತಪಡಿಸಿದ್ದರು. ಸಾಲಿನಲ್ಲೇ ನಿಂತು ಮತ ಚಲಾಯಿಸುವಂತೆ ಆತ ಒತ್ತಾಯಿಸಿದ್ದ. ಇದರಿಂದ ಆಕ್ರೋಶಗೊಂಡ ಶಾಸಕ ಶಿವಕುಮಾರ್ ನೋಡ ನೋಡುತ್ತಲೇ ಪ್ರಶ್ನಿಸಿದ ಮತದಾರನ ಕಪಾಳಕ್ಕೆ ಹೊಡೆದಿದ್ದಾರೆ.

VISTARANEWS.COM


on

Viral Video
Koo

ಹೈದರಾಬಾದ್‌: ಕೆಲವೊಮ್ಮೆ ಜನಪ್ರತಿನಿಧಿ(Politicians)ಗಳು ತಾವು ಜನಸೇವಕರು ಎಂಬುದನ್ನೇ ಮರೆತು ದರ್ಪದಿಂದ ವರ್ತಿಸುವ ಘಟನೆ ಆಗಾಗ ಕಣ್ಣ ಮುಂದೆ ಬರುತ್ತಲೇ ಇರುತ್ತವೆ. ಇದೀಗ ಅಂತಹದ್ದೇ ಒಂದು ಘಟನೆ ಆಂಧ್ರ ಪ್ರದೇಶದಲ್ಲಿ(Andra Pradesh) ನಡೆದಿದ್ದು, ಮತದಾರನ ಮೇಲೆ ಶಾಸಕ(Andra Pradesh MLA)ನೋರ್ವ ದರ್ಪ ಮೆರೆದಿದ್ದು, ಕಪಾಳಮೋಕ್ಷ ಮಾಡಿದ್ದಾರೆ. ಕೋಪಗೊಂಡ ಮತದಾರ ತಿರುಗಿ ಶಾಸಕನಿಗೂ ಒಂದು ಕೊಟ್ಟಿದ್ದಾನೆ ಈ ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ ವೈರಲ್‌ (Viral Video) ಆಗುತ್ತಿದ್ದು, ಹಲವರಿಂದ ಖಂಡನೆ ವ್ಯಕ್ತವಾಗಿದೆ.

ಏನಿದು ಘಟನೆ?

ಆಂಧ್ರ ಪ್ರದೇಶದ ಗುಂಟೂರು ಜಿಲ್ಲೆಯ ತೆನಾಲಿ ಮತಗಟ್ಟೆಯೊಂದರಲ್ಲಿ ಈ ಘಟನೆ ನಡೆದಿದೆ. ಮತ ಚಾಲಾಯಿಸಲೆಂದು ಸಾಲಿನಲ್ಲಿ ನಿಂತಿದ್ದ ಮತದಾರನಿಗೆ ಜಗನ್‌ ಮೋಹನ್‌ ರೆಡ್ಡಿ ನೇತೃತ್ವದ ವೈಎಸ್‌ಆರ್‌ ಕಾಂಗ್ರೆಸ್‌ ಅಭ್ಯರ್ಥಿ, ತೆನಾಲಿ ಕ್ಷೇತ್ರದ ಶಾಸಕ ಅನ್ನಬತುನಿ ಶಿವಕುಮಾರ್ ಎಂಬುವವರು ಕಪಾಳಮೋಕ್ಷ ಮಾಡಿದ್ದಾನೆ. ಶಾಸಕ ಶಿವಕುಮಾರ್ ಇಂದು ಮತದಾನಕ್ಕೆಂದು ಮತಗಟ್ಟೆಗೆ ಆಗಮಿಸಿದ್ದರು. ಈ ವೇಳೆ ನೂರಾರು ಜನ ಸಾಲಿನಲ್ಲಿ ನಿಂತಿದ್ದರೂ ಅದನು ಲೆಕ್ಕಿಸದೇ ಸಾಲು ತಪ್ಪಿಸಿ ನೇರವಾಗಿ ಮತಗಟ್ಟೆಯೊಳಗೆ ಪ್ರವೇಶಿಸಲು ಯತ್ನಿಸಿದ್ದಾರೆ. ಈ ವೇಳೆ ಇದನ್ನು ಕಂಡ ಮತದಾರನೊಬ್ಬ ಶಾಸಕರ ಈ ನಡೆಗೆ ಆಕ್ಷೇಪ ವ್ಯಕ್ತಪಡಿಸಿದ್ದರು. ಸಾಲಿನಲ್ಲೇ ನಿಂತು ಮತ ಚಲಾಯಿಸುವಂತೆ ಆತ ಒತ್ತಾಯಿಸಿದ್ದ. ಇದರಿಂದ ಆಕ್ರೋಶಗೊಂಡ ಶಾಸಕ ಶಿವಕುಮಾರ್ ನೋಡ ನೋಡುತ್ತಲೇ ಪ್ರಶ್ನಿಸಿದ ಮತದಾರನ ಕಪಾಳಕ್ಕೆ ಹೊಡೆದಿದ್ದಾರೆ.

ಏಟು ಬೀಳುತ್ತಿದ್ದಂತೆ ಮತದಾರನೂ ತಿರುಗಿ ಶಾಸಕನ ಕಪಾಳಕ್ಕೆ ಹೊಡೆದಿದ್ದಾರೆ. ಇದರ ಬೆನ್ನಲ್ಲೇ ಶಿವಕುಮಾರ್ ಜೊತೆಗಿದ್ದ ಆತನ ಬೆಂಬಲಿಗರು ಹಿಂದೆ ಮುಂದೆ ನೋಡದೆ ಮತದಾರನ ಮೇಲೆ ಮುಗಿಬಿದ್ದು ಸಾಮೂಹಿಕ ಹಲ್ಲೆ ನಡೆಸಿದ್ದಾರೆ. ಅಲ್ಲದೆ ಮತದಾರನನ್ನು ಹೊರಗೆ ಎಳೆದೊಯ್ದಿದ್ದಾರೆ. ಈ ವೇಳೆ ಭದ್ರತೆಗೆ ನಿಯೋಜಿಸಿದ್ದ ಪೊಲೀಸರು ಮಧ್ಯ ಪ್ರವೇಶಿಸಿ ಗಲಾಟೆ ನಿಯಂತ್ರಿಸಿದ್ದಾರೆ. ಸ್ಥಳದಲ್ಲಿ ಕೆಲಹೊತ್ತು ಭಾರೀ ಬಿಗುವಿನ ವಾತಾವರಣ ಸೃಷ್ಟಿಯಾಗಿತ್ತು. ಇನ್ನ ಈ ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ ವೈರಲ್‌ ಆಗುತ್ತಿದ್ದಂತೆ ಟಿಡಿಪಿ ಪ್ರತಿಕ್ರಿಯಿಸಿದ್ದು, ವೈಎಸ್‌ಆರ್‌ ಕಾಂಗ್ರೆಸ್‌ ಪಕ್ಷಕ್ಕೆ ಸೋಲು ಖಚಿತ ಎಂಬುದು ಸ್ಪಷ್ಟವಾಗಿದೆ. ಆ ಹತಾಶೆಯಲ್ಲಿ ಈ ರೀತಿ ಮಾಡುತ್ತಿದ್ದಾರೆ ಎಂದು ಟೀಕಿಸಿದೆ. ಇನ್ನು ಈ ಘಟನೆ ಬಗ್ಗೆ ಪ್ರತಿಕ್ರಿಯಿಸಲು ವೈಎಸ್‌ಆರ್‌ ಕಾಂಗ್ರೆಸ್‌ ನಿರಾಕರಿಸಿದೆ. ಘಟನೆಗೆ ಸಂಬಂಧಿಸಿದಂತೆ ಟಿಡಿಪಿ ಮತ್ತು ವೈಎಸ್‌ಆರ್‌ ಕಾಂಗ್ರೆಸ್‌ ನಡುವೆ ವಾಕ್ಸಮರ ಮುಂದುವರೆದಿದೆ.

ಇದನ್ನೂ ಓದಿ: Gold Heist Case: ಬಹುಕೋಟಿ ಚಿನ್ನ, ವಿದೇಶಿ ಕರೆನ್ಸಿ ದರೋಡೆ; ಭಾರತೀಯ ಮೂಲದ ವ್ಯಕ್ತಿ ಲಾಕ್‌!

ಇತ್ತೀಚೆಗೆ ಬಿಜೆಪಿ ಮುಖಂಡ, ನಟಿ ಅಮೂಲ್ಯ ಮಾವ ರಾಮಚಂದ್ರ ಅವರು ಕೂಡ ಸಾರ್ವಜನಿಕ ಸ್ಥಳದಲ್ಲಿ ತಮ್ಮ ಬೆಂಬಲಿಗರಿಗೆ ಕಪಾಳಮೋಕ್ಷ ಮಾಡಿದ್ದರು.

Continue Reading
Advertisement
Narendra Modi
ದೇಶ50 mins ago

Narendra Modi: ಇಂದು ವಾರಾಣಸಿಯಲ್ಲಿ ನಾಮಪತ್ರ ಸಲ್ಲಿಕೆ ಜತೆಗೆ ಮೋದಿ ಕಾರ್ಯಕ್ರಮ ಏನೇನು?

Dina Bhavishya
ಭವಿಷ್ಯ51 mins ago

Dina Bhavishya : ಉದ್ಯೋಗದ ಸ್ಥಳದಲ್ಲಿ ನಿಮ್ಮ ವಿರುದ್ಧ ಪಿತೂರಿ ಮಾಡ್ಬಹುದು ಎಚ್ಚರ!

IPL 2024
ಪ್ರಮುಖ ಸುದ್ದಿ6 hours ago

IPL 2024 : ಆರ್​ಸಿಬಿ, ಆರ್​ಆರ್​ಗೆ ಆಘಾತ; ಐಪಿಎಲ್ ಬೇಡ ಎಂದು ಹೊರಟ ಹಲವು ಆಟಗಾರರು

Prajwal Revanna Case
ಕರ್ನಾಟಕ6 hours ago

Prajwal Revanna Case: ರೇವಣ್ಣಗೆ ಜಾಮೀನು ಹಿನ್ನೆಲೆ ವಿದೇಶದಿಂದ ಪ್ರಜ್ವಲ್‌ ವಾಪಸ್?‌; ಕೋರ್ಟ್‌ಗೆ ಶರಣಾಗುವ ಸಾಧ್ಯತೆ

Hoarding
ಸಂಪಾದಕೀಯ6 hours ago

ವಿಸ್ತಾರ ಸಂಪಾದಕೀಯ: ಹೋರ್ಡಿಂಗ್ ಕುಸಿತ ಬೆಂಗಳೂರಿಗರಿಗೂ ಎಚ್ಚರಿಕೆಯ ಗಂಟೆ

Sushil Kumar Modi
ಪ್ರಮುಖ ಸುದ್ದಿ6 hours ago

Sushil Kumar Modi : ಬಿಹಾರದ ಮಾಜಿ ಡಿಸಿಎಂ ಸುಶೀಲ್ ಕುಮಾರ್ ಮೋದಿ ನಿಧನ

Tejasvi Surya
ದೇಶ7 hours ago

Tejasvi Surya: ಈ ದಲಿತ ನಾಯಕನ ಜತೆ ಚರ್ಚೆಗೆ ಬನ್ನಿ ರಾಹುಲ್‌ ಗಾಂಧಿ; ತೇಜಸ್ವಿ ಸೂರ್ಯ ಪಂಥಾಹ್ವಾನ!

IPL 2024
ಪ್ರಮುಖ ಸುದ್ದಿ7 hours ago

IPL 2024 : ಮಳೆಯಿಂದಾಗಿ ಪಂದ್ಯ ರದ್ದು, ಕೆಕೆಆರ್​ಗೆ ಮೊದಲೆರಡಲ್ಲೊಂದು ಸ್ಥಾನ ಫಿಕ್ಸ್​

Vidyarthi Vidyarthiniyare Movie
ಕರ್ನಾಟಕ7 hours ago

Vidyarthi Vidyarthiniyare Movie: ವಿದ್ಯಾರ್ಥಿ ವಿದ್ಯಾರ್ಥಿನಿಯರೇ ಚಿತ್ರದ ಟ್ರೈಲರ್ ಔಟ್; ಧುಮ್ಮಿಕ್ಕಿದ ಹರೆಯದ ತೊರೆ!

Road Accident Head on collision between bikes One person died on the spot
ಉತ್ತರ ಕನ್ನಡ7 hours ago

Road Accident: ಬೈಕ್‌ಗಳ ನಡುವೆ ಡಿಕ್ಕಿ; ಒಬ್ಬ ಸ್ಥಳದಲ್ಲೇ ಸಾವು, ಇಬ್ಬರಿಗೆ ಗಂಭೀರ ಗಾಯ

Sharmitha Gowda in bikini
ಕಿರುತೆರೆ7 months ago

Geetha Serial Kannada: ನಿದ್ದೆ ಕದ್ದ ಚೋರಿ! ನಟಿ `ಭಾನುಮತಿ’ ಹಾಟ್‌ ಪೋಟೊಗಳಿಗೆ ಫ್ಯಾನ್ಸ್ ಫುಲ್ ಫಿದಾ

Kannada Serials
ಕಿರುತೆರೆ7 months ago

Kannada Serials TRP: 2ನೇ ಸ್ಥಾನದಲ್ಲಿ 2 ಧಾರಾವಾಹಿಗಳು; ಟಿಆರ್‌ಪಿ ರೇಸ್‌ನಲ್ಲಿಲ್ಲ ಭಾಗ್ಯಲಕ್ಷ್ಮೀ!

Bigg Boss- Saregamapa 20 average TRP
ಕಿರುತೆರೆ7 months ago

Kannada Serials TRP: ಏಳನೇ ಸ್ಥಾನಕ್ಕೆ ʻಅಮೃತಧಾರೆʼ ಕುಸಿತ; ಬಿಗ್‌ ಬಾಸ್‌-ಸರಿಗಮಪ ಟಿಆರ್‌ಪಿ ಎಷ್ಟು?

galipata neetu
ಕಿರುತೆರೆ6 months ago

Kanyadana Serial: ಕಿರುತೆರೆಗೆ ಮತ್ತೆ ಎಂಟ್ರಿ ಕೊಟ್ಟ ʻಗಾಳಿಪಟʼ ಖ್ಯಾತಿಯ ʻನೀತುʼ!

Kannada Serials
ಕಿರುತೆರೆ8 months ago

Kannada Serials TRP: ನಾಲ್ಕನೇ ಸ್ಥಾನಕ್ಕೆ ಕುಸಿತ ಕಂಡ ʻಸೀತಾ ರಾಮʼ; ಟಿಆರ್‌ಪಿ ರೇಸ್‌ಗೆ ʻಭಾಗ್ಯಲಕ್ಷ್ಮಿʼ ಬ್ಯಾಕ್‌!

Kannada Serials
ಕಿರುತೆರೆ7 months ago

Kannada Serials TRP: ಟಿಆರ್‌ಪಿಯಲ್ಲಿ ʻಭಾಗ್ಯಲಕ್ಷ್ಮೀʼ ಹವಾ; ʻಪುಟ್ಟಕ್ಕನ ಮಕ್ಕಳುʼ ಧಾರಾವಾಹಿಗೆ ಸಂಕಷ್ಟ!

Bigg Boss' dominates TRP; Sita Rama fell to the sixth position
ಕಿರುತೆರೆ7 months ago

Kannada Serials TRP: ಟಿಆರ್‌ಪಿಯಲ್ಲಿ ʻಬಿಗ್ ಬಾಸ್ʼದೇ ಮೇಲುಗೈ; 6ನೇ ಸ್ಥಾನಕ್ಕೆ ಕುಸಿದ ʻಸೀತಾ ರಾಮʼ

geetha serial Dhanush gowda engagement
ಕಿರುತೆರೆ5 months ago

Dhanush Gowda: ಗೀತಾ ಧಾರಾವಾಹಿ ನಟನ ನಿಶ್ಚಿತಾರ್ಥ; ಭವ್ಯಾಳ ಕಮೆಂಟ್‌ ಬಾಕ್ಸ್‌ ಆಫ್‌!

varun
ಕಿರುತೆರೆ6 months ago

Brindavana Serial: ʼಬೃಂದಾವನʼ ಧಾರಾವಾಹಿಯಲ್ಲಿ ದೊಡ್ಡ ಟ್ವಿಸ್ಟ್‌; ಪ್ರಮುಖ ಪಾತ್ರಧಾರಿಯೇ ಬದಲು

Kannada Serials
ಕಿರುತೆರೆ8 months ago

Kannada Serials TRP: ಟಿಆರ್‌ಪಿಯಲ್ಲಿ ಏರಿಕೆ ಕಂಡ ʻಅಮೃತಧಾರೆʼ; ʻಗಟ್ಟಿಮೇಳʼಕ್ಕೆ ನಾಲ್ಕನೇ ಸ್ಥಾನ!

Dina Bhavishya
ಭವಿಷ್ಯ51 mins ago

Dina Bhavishya : ಉದ್ಯೋಗದ ಸ್ಥಳದಲ್ಲಿ ನಿಮ್ಮ ವಿರುದ್ಧ ಪಿತೂರಿ ಮಾಡ್ಬಹುದು ಎಚ್ಚರ!

HD Revanna Bail Revanna will not leave the country condition imposed by the court
ಕ್ರೈಂ11 hours ago

HD Revanna Bail: ರೇವಣ್ಣ ದೇಶ ಬಿಡಂಗಿಲ್ಲ, ಕೆ.ಆರ್‌. ನಗರಕ್ಕೆ ಎಂಟ್ರಿ ಕೊಡಂಗಿಲ್ಲ! ಕೋರ್ಟ್‌ ವಿಧಿಸಿದ ಷರತ್ತು ಏನು?

Prajwal Revanna case HD Revanna finally gets bail What was the argument like
ಕ್ರೈಂ11 hours ago

HD Revanna Bail: ಎಚ್‌.ಡಿ ರೇವಣ್ಣಗೆ ಕೊನೆಗೂ ಜಾಮೀನು; ಎಸ್‌ಐಟಿಗೆ ಮುಖಭಂಗ!

Prajwal Revanna Case Revanna bail plea to be heard Judge reprimands SIT cops for their behaviour
ಕ್ರೈಂ11 hours ago

Prajwal Revanna Case: ರೇವಣ್ಣ ಜಾಮೀನು ಅರ್ಜಿ ವಿಚಾರಣೆ; ಎಸ್‌ಐಟಿ ಪೊಲೀಸರ ವರ್ತನೆಗೆ ಜಡ್ಜ್‌ ಗರಂ!

Karnataka Weather Forecast
ಮಳೆ12 hours ago

Karnataka Weather : ನಾಳೆ ಮುಕ್ಕಾಲು ಕರ್ನಾಟಕದಲ್ಲಿ ಬಿರುಗಾಳಿ ಜತೆಗೆ ವಿಪರೀತ ಮಳೆ

Modi Roadshow Live
ದೇಶ12 hours ago

Modi Roadshow Live: ವಾರಾಣಸಿಯಲ್ಲಿ ಮೋದಿ ಭರ್ಜರಿ ರೋಡ್‌ ಶೋ; ಲೈವ್‌ ಇಲ್ಲಿ ವೀಕ್ಷಿಸಿ

Karnataka Rain
ಮಳೆ19 hours ago

Karnataka Rain : ಕುರಿಗಾಹಿಗಳ ಪ್ರಾಣ ಕಸಿದ ಸಿಡಿಲು; 20ಕ್ಕೂ ಹೆಚ್ಚು ಕುರಿಗಳು ಸಾವು

karnataka weather forecast karnataka rains
ಮಳೆ23 hours ago

Karnataka Weather : ವಾಯುಭಾರ ಕುಸಿತ; ಕರಾವಳಿ, ಮಲೆನಾಡು ಸೇರಿ ಹಲವೆಡೆ ಭಾರಿ ಮಳೆ ಎಚ್ಚರಿಕೆ

Dina Bhavishya
ಭವಿಷ್ಯ1 day ago

Dina Bhavishya : ಇಂದು ಹೂಡಿಕೆ ಮಾಡಿದರೆ ಗಳಿಸುವಿರಿ ಭಾರಿ ಲಾಭ; ಅನಿರೀಕ್ಷಿತ ಸುದ್ದಿಯಿಂದ ಸಂತಸ

Prajwal Revanna Case I was never kidnapped and son has made a false complaint Video of victim goes viral
ಕ್ರೈಂ1 day ago

Prajwal Revanna Case: ರೇವಣ್ಣ ಕೇಸ್‌ಗೆ ಟ್ವಿಸ್ಟ್‌! ನನ್ನ ಕಿಡ್ನ್ಯಾಪ್‌ ಮಾಡಿಯೇ ಇಲ್ಲ; ಮಗ ತಪ್ಪು ದೂರು ಕೊಟ್ಟಿದ್ದಾನೆ; ಸಂತ್ರಸ್ತೆಯ ವಿಡಿಯೊ ವೈರಲ್

ಟ್ರೆಂಡಿಂಗ್‌