Parineeti Chopra : ನಿಶ್ಚಿತಾರ್ಥದ ಬೆನ್ನಲ್ಲೇ ಗಾಯಕಿಯಾದ ಪರಿಣಿತಿ, ತು ಜೂಮ್‌ ಎನ್ನುತ್ತಾ ಹಾಡುತ್ತಿದ್ದಾರೆ ನೋಡಿ - Vistara News

ಬಾಲಿವುಡ್

Parineeti Chopra : ನಿಶ್ಚಿತಾರ್ಥದ ಬೆನ್ನಲ್ಲೇ ಗಾಯಕಿಯಾದ ಪರಿಣಿತಿ, ತು ಜೂಮ್‌ ಎನ್ನುತ್ತಾ ಹಾಡುತ್ತಿದ್ದಾರೆ ನೋಡಿ

ನಟಿ ಪರಿಣಿತಿ ಚೋಪ್ರಾ (Parineeti Chopra) ಅವರು ತು ಜೂಮ್‌ ಹಾಡನ್ನು ಹಾಡಿದ್ದಾರೆ. ಅವರ ಈ ವಿಡಿಯೊ ಸಾಮಾಜಿಕ ಜಾಲತಾಣಗಳಲ್ಲಿ ಸದ್ದು ಮಾಡುತ್ತಿದೆ.

VISTARANEWS.COM


on

Parineeti Chopra singing
ಮಹತ್ವದ, ಕುತೂಹಲಕರ ಸುದ್ದಿಗಾಗಿ ಫಾಲೊ ಮಾಡಿ
Koo

ಮುಂಬೈ: ಬಾಲಿವುಡ್‌ ನಟಿ ಪರಿಣಿತಿ ಚೋಪ್ರಾ (Parineeti Chopra) ಇತ್ತೀಚೆಗಷ್ಟೇ ಆಮ್‌ ಆದ್ಮಿ ಪಕ್ಷದ ಸಂಸದ ರಾಘವ್‌ ಛಡ್ಡಾ ಅವರೊಂದಿಗೆ ನಿಶ್ಚಿತಾರ್ಥ ಮಾಡಿಕೊಂಡಿದ್ದಾರೆ. ಅದರ ಬೆನ್ನಲ್ಲೇ ನಟಿ ಇದೀಗ ಗಾಯಕಿಯಾಗಿಬಿಟ್ಟಿದ್ದಾರೆ. ತು ಜೂಮ್‌ ಜೂಮ್‌ ಎನ್ನುತ್ತಾ ಹಾಡುತ್ತಿರುವ ಪರಿಣಿತಿಯ ವಿಡಿಯೊ ಸಾಮಾಜಿಕ ಜಾಲತಾಣಗಳಲ್ಲಿ ಸಕತ್‌ ಸದ್ದು ಮಾಡುತ್ತಿದೆ.

ಕೋಕ್‌ ಸ್ಟುಡಿಯೋ ಸೀಸನ್‌ 14ರ ತು ಜೂಮ್‌ ಹಾಡನ್ನು ನಟಿ ಹಾಡಿದ್ದಾರೆ. ಪಾಕಿಸ್ತಾನಿ ಗಾಯಕರಾದ ನಸೀಬೋ ಲಾಲ್‌ ಮತ್ತು ಅಬಿದಾ ಪರ್ವೀನ್‌ ಅವರು ಹಾಡಿರುವ ಈ ಹಾಡು 2022ರಲ್ಲಿ ಬಿಡುಗಡೆಯಾಗಿತ್ತು. ಹಾಡನ್ನು ನಟಿ ತನ್ನ ಇಷ್ಟದ ಹಾಡು ಎಂದು ಹೇಳಿದ್ದಾರೆ.

ಇದನ್ನೂ ಓದಿ: Viral Video : ಸ್ಕೂಟರ್‌ನಲ್ಲೇ ಲಿಪ್‌ ಲಾಕ್‌! ಇದು ಹುಡುಗ-ಹುಡುಗಿ ಕಥೆಯಲ್ಲ, ಇಬ್ಬರು ಹುಡುಗರ ಕಥೆ!

ತಾನು ಹಾಡು ಹಾಡಿರುವ ವಿಡಿಯೊವನ್ನು ಬ್ಲಾಕ್‌ ಅಂಡ್‌ ವೈಟ್‌ ರೀತಿಯಲ್ಲಿ ಎಡಿಟ್‌ ಮಾಡಿ ಹಂಚಿಕೊಂಡಿರುವ ನಟಿ “ಕೆಲವೊಮ್ಮೆ ಅತ್ಯುತ್ತಮ ಕ್ಷಣಗಳು ಸ್ವಯಂಪ್ರೇರಿತವಾಗಿ ಸಂಭವಿಸುತ್ತವೆ. ಡಬ್ಬಿಂಗ್ ಸ್ಟುಡಿಯೋಗೆ ಹೋದಾಗ ನನ್ನ ಸಾರ್ವಕಾಲಿಕ ನೆಚ್ಚಿನ ಹಾಡುಗಳಲ್ಲಿ ಒಂದನ್ನು ಹಾಡದೇ ಇರಲು ಸಾಧ್ಯವಾಗಲಿಲ್ಲ” ಎಂದು ಬರೆದುಕೊಂಡಿದ್ದಾರೆ. ನಟಿ ಹಂಚಿಕೊಂಡ ಈ ಪೋಸ್ಟ್‌ ಸಾಮಾಜಿಕ ಜಾಲತಾಣಗಳಲ್ಲಿ ಭಾರೀ ಸದ್ದು ಮಾಡುತ್ತಿದೆ.


ನಟಿಯ ವಿಡಿಯೊಗೆ ಹಿರಿಯ ನಟ ಅನುಪಮ್ ಖೇರ್‌ ಸೇರಿ ಅನೇಕರು ಕಾಮೆಂಟ್‌ಗಳನ್ನು ಮಾಡಿದ್ದಾರೆ. ಅನುಪಮ್‌ ಖೇರ್‌ ಅವರು “ಬ್ಯೂಟಿಫುಲ್‌” ಎಂದು ಹೇಳಿದ್ದು, ಹಾರ್ಟ್‌ ಇಮೋಜಿ ಕೊಟ್ಟಿದ್ದಾರೆ. ಸಿಮಿ ಗರೆವಾಲ್‌ ಕೂಡ ಕಾಮೆಂಟ್‌ ಮಾಡಿದ್ದು, “ಸೂಪರ್‌! ನನಗೂ ಇಷ್ಟು ಚೆನ್ನಾಗಿ ಹಾಡುವುದಕ್ಕೆ ಬರಬೇಕಿತ್ತ” ಎಂದು ಹೇಳಿದ್ದಾರೆ. ಪರಿಣಿತಿ ಅವರ ಅಭಿಮಾನಿಗಳಂತೂ ಹಲವಾರು ರೀತಿಯಲ್ಲಿ ವಿಡಿಯೊಗೆ ಕಾಮೆಂಟ್‌ಗಳ ಸುರಿಮಳೆ ಸುರಿಸಿದ್ದಾರೆ.

ಇದನ್ನೂ ಓದಿ: Viral Video: ಹೊಸ ಡಾಂಬರು ರಸ್ತೆಯನ್ನು ಬರಿಗೈಯಲ್ಲಿ ಎತ್ತಿ ಹಿಡಿದ ಗ್ರಾಮಸ್ಥರು; ಜರ್ಮನ್ ತಂತ್ರಜ್ಞಾನವಂತೆ!

ಪರಿಣಿತಿ ಚೋಪ್ರಾ ಮತ್ತು ರಾಘವ್‌ ಛಡ್ಡಾ ಅವರು ಮೇ 13ರಂದು ನಿಶ್ಚಿತಾರ್ಥ ಮಾಡಿಕೊಂಡರು. ನವದೆಹಲಿಯ ಕಪುರ್ತಲಾ ಹೌಸ್‌ನಲ್ಲಿ ನಡೆದ ಕಾರ್ಯಕ್ರಮದಲ್ಲಿ ಇಬ್ಬರ ಕುಟುಂಬಗಳು ಹಾಗೂ ಆಪ್ತ ಸ್ನೇಹಿತರು ಭಾಗಿಯಾಗಿದ್ದರು. ಸದ್ಯದಲ್ಲೇ ಈ ಜೋಡಿ ಹಸೆಮಣೆ ಏರಲು ಸಿದ್ಧತೆ ನಡೆಸಿಕೊಳ್ಳುತ್ತಿದೆ.

ಕ್ಷಣ ಕ್ಷಣದ ಮಾಹಿತಿಗಾಗಿ Vistara News FaceBook ಪೇಜ್ ಫಾಲೋ ಮಾಡಿ
ಮಹತ್ವದ ಮಾಹಿತಿಗಾಗಿ ವಿಸ್ತಾರ ನ್ಯೂಸ್ ಆ್ಯಪ್ ಉಚಿತವಾಗಿ ಡೌನ್ ಲೋಡ್ ಮಾಡಿಕೊಳ್ಳಿ: Andriod App | IOS App
Continue Reading
Click to comment

Leave a Reply

Your email address will not be published. Required fields are marked *

ಬಾಲಿವುಡ್

Hamare Baarah: ಮುಸ್ಲಿಂ ಮಹಿಳೆಯರ ಕುರಿತ ʻಹಮಾರೆ ಬಾರಾʼ ಸಿನಿಮಾ ಬಿಡುಗಡೆಗೆ ಸುಪ್ರೀಂ ಕೋರ್ಟ್ ತಡೆ

Hamare Baarah: ಗುರುವಾರ, ಸುಪ್ರೀಂ ಕೋರ್ಟ್ ಚಿತ್ರದ ಟೀಸರ್ ಅನ್ನು “ಆಕ್ಷೇಪಾರ್ಹ” ಎಂದು ಕರೆದಿದೆ. ಮಾತ್ರವಲ್ಲ ಸಿನಿಮಾ ಬಿಡುಗಡೆಯನ್ನು ಸದ್ಯಕ್ಕೆ ನಿಲ್ಲಿಸಬೇಕು ಎಂದು ಆದೇಶ ನೀಡಿದೆ. ಚಿತ್ರ ಇದೇ ಜೂನ್ 14 ರಂದು ರಿಲೀಸ್‌ ಆಗಬೇಕಿತ್ತು. ಬಾಂಬೆ ಹೈಕೋರ್ಟ್‌ನಿಂದ ಅರ್ಜಿ ಇತ್ಯರ್ಥವಾಗುವವರೆಗೆ ಚಿತ್ರದ ಪ್ರದರ್ಶನಕ್ಕೆ ಅವಕಾಶ ನೀಡಬಾರದು ಎಂದು ಪೀಠ ಸೂಚಿಸಿದೆ.

VISTARANEWS.COM


on

Hamare Baarah Release Supreme Court has imposed a stay
Koo

ಬೆಂಗಳೂರು: ಹಮ್ ದೋ, ಹಮಾರೆ ಬಾರಾ’ (Hamare Baarah) ಚಲನಚಿತ್ರದಲ್ಲಿ ಮುಸ್ಲಿಂ ಸಮುದಾಯದ ಹೆಣ್ಣು ಮಕ್ಕಳನ್ನು ಗುರಿಯಾಗಿಸಿಕೊಂಡು ಅವಹೇಳನಕಾರಿಯಾಗಿ ಬಿಂಬಿಸಲಾಗಿದೆ ಎಂಬ ಆರೋಪ ಕೇಳಿ ಬಂದಿತ್ತು. ಹೀಗಾಗಿ ಈ ಸಿನಿಮಾವನ್ನು ಕರ್ನಾಟಕದಲ್ಲಿ ನಿಷೇಧ ಮಾಡಿ ಎಂದು ರಾಜ್ಯ ಸರಕಾರ ಆದೇಶ ಹೊರಡಿಸಿತ್ತು. ಈಗ ಹಮಾರೆ ಬಾರಾ ಚಿತ್ರದ ಬಿಡುಗಡೆಗೆ ಸುಪ್ರೀಂ ಕೋರ್ಟ್ ತಡೆಯಾಜ್ಞೆ ನೀಡಿದೆ. ಗುರುವಾರ, ಸುಪ್ರೀಂ ಕೋರ್ಟ್ ಚಿತ್ರದ ಟೀಸರ್ ಅನ್ನು “ಆಕ್ಷೇಪಾರ್ಹ” ಎಂದು ಕರೆದಿದೆ. ಮಾತ್ರವಲ್ಲ ಸಿನಿಮಾ ಬಿಡುಗಡೆಯನ್ನು ಸದ್ಯಕ್ಕೆ ನಿಲ್ಲಿಸಬೇಕು ಎಂದು ಆದೇಶ ನೀಡಿದೆ. ಚಿತ್ರ ಇದೇ ಜೂನ್ 14 ರಂದು ರಿಲೀಸ್‌ ಆಗಬೇಕಿತ್ತು.

ಅರ್ಜಿದಾರರ ಪರ ವಕೀಲ ಫೌಜಿಯಾ ಶಕೀಲ್ ಅವರ ವಾದವನ್ನು ಆಲಿಸಿದ ನ್ಯಾಯಮೂರ್ತಿಗಳಾದ ವಿಕ್ರಮ್ ನಾಥ್ ಮತ್ತು ಸಂದೀಪ್ ಮೆಹ್ತಾ ಅವರಿದ್ದ ಪೀಠ, ಅರ್ಜಿಯ ಕುರಿತು ತ್ವರಿತ ನಿರ್ಧಾರವನ್ನು ತೆಗೆದುಕೊಳ್ಳುವಂತೆ ಬಾಂ ಬೆ ಹೈಕೋರ್ಟ್‌ಗೆ ಸೂಚಿಸಿದೆ. ನ್ಯಾಯಮೂರ್ತಿ ಮೆಹ್ತಾ ಅವರು ಚಿತ್ರದ ಟ್ರೈಲರ್‌ ಬಗ್ಗೆಯೂ ಆಕ್ಷೇಪಣೆ ವ್ಯಕ್ತಪಡಿಸಿದ್ದಾರೆ. “ಇಂದು ಬೆಳಗ್ಗೆ ನಾವು ಟೀಸರ್‌ ನೋಡಿದ್ದೇವೆ. ಆಕ್ಷೇಪಾರ್ಹವಾಗಿದೆ. ಟೀಸರ್ ಯೂಟ್ಯೂಬ್‌ನಲ್ಲಿ ಲಭ್ಯವಿದೆ. ” ಎಂದು ಸಂದೀಪ್ ಮೆಹ್ತಾ ಹೇಳಿದ್ದಾರೆ. ಬಾಂಬೆ ಹೈಕೋರ್ಟ್‌ನಿಂದ ಅರ್ಜಿ ಇತ್ಯರ್ಥವಾಗುವವರೆಗೆ ಚಿತ್ರದ ಪ್ರದರ್ಶನಕ್ಕೆ ಅವಕಾಶ ನೀಡಬಾರದು ಎಂದು ಪೀಠ ಸೂಚಿಸಿದೆ.

ಸಿನಿಮಾದಲ್ಲಿ ಒಂದಷ್ಟು ದೃಶ್ಯಗಳನ್ನು, ಸಂಭಾಷಣೆಯನ್ನು ತೆಗೆಯಬೇಕು. ಒಬ್ಬ ಮುಸ್ಲಿಂ ಸದಸ್ಯ ಸೇರಿ ಮೂವರು ಇರುವ ಒಂದು ಸಮಿತಿ ರಚಿಸಲಾಗುತ್ತದೆ. ಆ ಸಮಿತಿಯ ಅಭಿಪ್ರಾಯದ ನಂತರ ಮುಂದಿನ ತೀರ್ಮಾನ ತೆಗೆದುಕೊಳ್ಳಲಾಗುತ್ತದೆ. ಅಲ್ಲಿಯವರೆಗೆ ಸಿನಿಮಾವನ್ನು ಬಿಡುಗಡೆ ಮಾಡಬಹುದು ಎಂಬುದಾಗಿ ಬಾಂಬೆ ಹೈಕೋರ್ಟ್‌ ಈ ಹಿಂದೆ ತಿಳಿಸಿತ್ತು. ಕರ್ನಾಟಕದಲ್ಲಿ ಮಾತ್ರ ಸಿನಿಮಾ ಬಿಡುಗಡೆಯನ್ನು 15 ದಿನಗಳವರೆಗೆ ನಿಷೇಧಿಸಲಾಗಿತ್ತು. ಕೋಮು ಸೌಹಾರ್ದತೆಗೆ ಧಕ್ಕೆ ಬರುವ ಸಾಧ್ಯತೆ ಇರುವ ಕಾರಣ ನಿಷೇಧಿಸಲಾಗಿದೆ ಎಂದು ರಾಜ್ಯ ಸರ್ಕಾರ ತಿಳಿಸಿತ್ತು.

ಇದನ್ನೂ ಓದಿ: Hamare Baarah: ಮುಸ್ಲಿಂ ಮಹಿಳೆಯರ ಕುರಿತ ಹಮಾರೆ ಬಾರಾ ಸಿನಿಮಾ ರಿಲೀಸ್‌ಗೆ ಕೋರ್ಟ್‌ ಗ್ರೀನ್‌ ಸಿಗ್ನಲ್!

ಸಿನಿಮಾದ ಕತೆ ಏನು?

ಮನ್ಸೂರ್‌ ಅಲಿ ಖಾನ್‌ ಸಂಜಾರಿ ಎಂಬ ಮುಸ್ಲಿಂ ವ್ಯಕ್ತಿಯ ಸುತ್ತಲೂ ನಡೆಯುವ ಕತೆಯನ್ನು ಹೆಣೆಯಲಾಗಿದೆ. ಮನ್ಸೂರ್‌ ಅಲಿ ಖಾನ್‌ ಸಂಜಾರಿಯ ಮೊದಲ ಪತ್ನಿಯು ಹೆರಿಗೆ ವೇಳೆಯೇ ನಿಧನರಾಗುತ್ತಾರೆ. ಆದರೆ, ಮಕ್ಕಳು ಬೇಕು ಎಂಬ ಕಾರಣಕ್ಕಾಗಿ ಎರಡನೇ ಮದುವೆಯಾಗುವ ಆತನು, ಎರಡನೇ ಪತ್ನಿಯೊಂದಿಗೆ 5 ಮಕ್ಕಳೊಂದಿಗೆ ಪಡೆಯುವ ಆತನು, ಪತ್ನಿಯು 6ನೇ ಬಾರಿ ಗರ್ಭಿಣಿಯಾಗುತ್ತಾರೆ. ಆಗ ವೈದ್ಯರು, ಮಹಿಳೆ ಜೀವಕ್ಕೆ ಕುತ್ತಿದೆ, ಗರ್ಭಪಾತ ಮಾಡಿಸಬೇಕು ಎಂದು ಹೇಳುತ್ತಾರೆ. ಆದರೆ, ಗರ್ಭಪಾತಕ್ಕೆ ಮನ್ಸೂರ್‌ ಅಲಿ ಖಾನ್‌ ಸಂಜಾರಿ ನಿರಾಕರಿಸುತ್ತಾನೆ.

ಮನ್ಸೂರ್‌ ಅಲಿ ಖಾನ್‌ ಸಂಜಾರಿಯ ಮೊದಲನೇ ಪತ್ನಿಯ ಮಗಳು ಮಲತಾಯಿಯ ಹಕ್ಕುಗಳಿಗಾಗಿ ಹೋರಾಡಲು ಕೋರ್ಟ್‌ ಮೊರೆ ಹೋಗುತ್ತಾಳೆ. ಕೋರ್ಟ್‌ನಲ್ಲಿ ಆಕೆಯ ವಾದ ಏನಿರುತ್ತದೆ? ಪುರುಷ ಪ್ರಧಾನ ಸಮಾಜದ ಕಟ್ಟುಪಾಡುಗಳೇನು? ಮುಸ್ಲಿಂ ಮಹಿಳೆಯರ ಮೇಲೆ ಹೇಗೆ ದೌರ್ಜನ್ಯ ನಡೆಯುತ್ತಿದೆ ಎಂಬುದನ್ನು ಕೋರ್ಟ್‌ಗೆ ಮನವರಿಕೆ ಮಾಡುತ್ತಾಳೆ. ಕತೆಯಲ್ಲಿ ಮುಂದೇನಾಗುತ್ತದೆ ಎಂಬುದೇ ಕುತೂಹಲವಾಗಿದೆ. ಆದರೆ, ಸಿನಿಮಾಗೆ ಹಲವರು ವಿರೋಧ ವ್ಯಕ್ತಪಡಿಸಿದ್ದರು. ಮುಸ್ಲಿಂ ಸಂಘಟನೆಗಳು ಕೋರ್ಟ್‌ ಮೊರೆ ಹೋಗಿದ್ದವು.

Continue Reading

ಬಾಲಿವುಡ್

Sonakshi Sinha: ಸೋನಾಕ್ಷಿ ಸಿನ್ಹಾ – ಜಹೀರ್ ಇಕ್ಬಾಲ್ ಮದುವೆಯ ಆಮಂತ್ರಣದ ಆಡಿಯೊ ಕ್ಲಿಪ್‌ ಲೀಕ್‌!

Sonakshi Sinha: ಲೀಕ್‌ ಆದ ಆಡಿಯೊ ಕ್ಲಿಪ್‌ ಫೋಟೊದಲ್ಲಿ ಬಾಲಿವುಡ್ ನಟಿ ಶಿಲ್ಪಾ ಶೆಟ್ಟಿ ಅವರ ರೆಸ್ಟೋರೆಂಟ್ ಬಾಸ್ಟಿಯನ್‌ನಲ್ಲಿ ಪಾರ್ಟಿ ನಡೆಯಲಿದೆ ಎಂದು ಉಲ್ಲೇಖವಾಗಿದೆ. ಕಾರ್ಡ್‌ನಲ್ಲಿ ವದಂತಿಗಳು ನಿಜ ಎಂದು ಬರೆಯಲಾಗಿದೆ. ಇದೀಗ ಈ ಆಡಿಯೊ ವೈರಲ್‌ ಆಗುತ್ತಿದ್ದಂತೆ ಸೋನಾಕ್ಷಿ ಅವರಿಗೆ ಅವರ ಫ್ಯಾನ್ಸ್‌ ಶುಭ ಹಾರೈಸುತ್ತಿದ್ದಾರೆ. ʻʻಆಡಿಯೊ ತುಂಬಾ ಮುದ್ದಾಗಿದೆ!! ಅಭಿನಂದನೆಗಳು!!” ಎಂದು ಒಬ್ಬರು ಕಮೆಂಟ್‌ ಮಾಡಿದ್ದಾರೆ.

VISTARANEWS.COM


on

Sonakshi Sinha Zaheer Iqbal confirm their wedding in leaked audio
Koo

ಬೆಂಗೂರು: ಸೋನಾಕ್ಷಿ ಸಿನ್ಹಾ (Sonakshi Sinha) ಮತ್ತು ಜಹೀರ್ ಇಕ್ಬಾಲ್ ( Zaheer Iqbal) ಜೂನ್ 23 ರಂದು ವಿವಾಹವಾಗಲಿದ್ದಾರೆ. ಮದುವೆಯ ಆಮಂತ್ರಣದ ಆಡಿಯೊ ಕ್ಲಿಪ್‌ ರೆಡ್ಡಿಟ್‌ನಲ್ಲಿ ವೈರಲ್ ಆಗಿದೆ. ಮದುವೆಯ ಆಮಂತ್ರಣದ ಆಡಿಯೊ QR ಕೋಡ್ ಸಹ ಒಳಗೊಂಡಿದೆ. ಇದರಲ್ಲಿ ಜೋಡಿ ತಮ್ಮ ಮದುವೆ ದಿನಾಂಕವನ್ನು ಖಚಿತಪಡಿಸಿದೆ. ಅಧಿಕೃತವಾಗಿ ಪತಿ-ಪತ್ನಿ ಯಾಗಲು ಸಮಯ ಬಂದಾಯ್ತು ಎಂದು ಜೋಡಿ ಹೇಳಿಕೊಂಡಿದೆ.

“ನಮ್ಮೆಲ್ಲ ಸ್ನೇಹಿತರಿಗೆ ಹಾಗೂ ಕುಟುಂಬಕ್ಕೆ, ಹಾಯ್‌. ಕಳೆದ ಏಳು ವರ್ಷಗಳಿಂದ ನಾವು ಒಟ್ಟಿಗೆ ಇದ್ದೇವೆ. ಸಂತೋಷ, ಪ್ರೀತಿ, ನಗು ಹೀಗೆ ಈ ಸುಂದರ ಕ್ಷಣಕ್ಕೆ ಕಾರಣವಾಗಿವೆ” ಎಂದು ಜಹೀರ್ ಹೇಳುತ್ತಿದ್ದಂತೆ, “ಒಬ್ಬರಿಗೊಬ್ಬರು ಗೆಳತಿ ಮತ್ತು ಗೆಳೆಯರಾಗುವ ಕ್ಷಣ” ಎಂದು ಸೋನಾಕ್ಷಿ ಹೇಳುತ್ತಾರೆ, ಅಧಿಕೃತವಾಗಿ ಪತಿ ಹಾಗೂ ಪತ್ನಿಯಾಗುವ ಸಮಯ ಬಂದಾಯ್ತು. ನೀವು ಇಲ್ಲದೆ ಈ ಆಚರಣೆ ಪೂರ್ಣಗೊಳ್ಳುವುದಿಲ್ಲ. ಆದ್ದರಿಂದ ಜೂನ್ 23 ರಂದು ನಮ್ಮೊಂದಿಗೆ ಪಾರ್ಟಿ ಮಾಡಿ. ಅಲ್ಲಿ ಸಿಗೋಣ” ಎಂದು ಜೋಡಿ ಮಾತನಾಡಿರುವ ಆಡಿಯೊ ಕ್ಲಿಪ್‌ ವೈರಲ್‌ ಆಗಿದೆ.

ಲೀಕ್‌ ಆದ ಆಡಿಯೊ ಕ್ಲಿಪ್‌ ಫೋಟೊದಲ್ಲಿ ಬಾಲಿವುಡ್ ನಟಿ ಶಿಲ್ಪಾ ಶೆಟ್ಟಿ ಅವರ ರೆಸ್ಟೋರೆಂಟ್ ಬಾಸ್ಟಿಯನ್‌ನಲ್ಲಿ ಪಾರ್ಟಿ ನಡೆಯಲಿದೆ ಎಂದು ಉಲ್ಲೇಖವಾಗಿದೆ. ಕಾರ್ಡ್‌ನಲ್ಲಿ ವದಂತಿಗಳು ನಿಜ ಎಂದು ಬರೆಯಲಾಗಿದೆ. ಇದೀಗ ಈ ಆಡಿಯೊ ವೈರಲ್‌ ಆಗುತ್ತಿದ್ದಂತೆ ಸೋನಾಕ್ಷಿ ಅವರಿಗೆ ಅವರ ಫ್ಯಾನ್ಸ್‌ ಶುಭ ಹಾರೈಸುತ್ತಿದ್ದಾರೆ. ʻʻಆಡಿಯೊ ತುಂಬಾ ಮುದ್ದಾಗಿದೆ!! ಅಭಿನಂದನೆಗಳು!!” ಎಂದು ಒಬ್ಬರು ಕಮೆಂಟ್‌ ಮಾಡಿದ್ದಾರೆ.

ಇದನ್ನೂ ಓದಿ: Sonakshi Sinha: ಜಹೀರ್ ಇಕ್ಬಾಲ್ ಜತೆ ಜೂನ್ 23ರಂದು ಸೋನಾಕ್ಷಿ ಸಿನ್ಹಾ ಅದ್ಧೂರಿ ಮದುವೆ?

Sonakshi & Zaheer, wedding confirmed on June 23! 💍
byu/FleaBird_ inBollyBlindsNGossip

ಇತ್ತೀಚಿನ ವರದಿಯ ಪ್ರಕಾರ ಸೋನಾಕ್ಷಿ ಮತ್ತು ಜಹೀರ್ ರಿಜಿಸ್ಟರ್ ಮ್ಯಾರೇಜ್ ಆಗಲಿದ್ದಾರೆ ಎನ್ನಲಾಗಿದೆ. ಜೂನ್ 23 ರಂದು ಆರತಕ್ಷತೆ ಪಾರ್ಟಿ ನಡೆಯಲಿದೆ. ಲವ್ ಬರ್ಡ್ಸ್ ಆಯುಷ್ ಶರ್ಮಾ, ಹುಮಾ ಖುರೇಷಿ ಮತ್ತು ವರುಣ್ ಶರ್ಮಾ ಅವರಿಗೆ ಈಗಾಗಲೇ ಸೋನಾಕ್ಷಿ ಆಹ್ವಾನವನ್ನು ನೀಡಿದ್ದಾರೆ ಎನ್ನಲಾಗಿದೆ. ಫರ್ದೀನ್ ಖಾನ್, ತಾಹಾ ಶಾ ಬಾದುಶಾ, ಅದಿತಿ ರಾವ್ ಹೈದರಿ, ಶರ್ಮಿನ್ ಸೆಗಲ್ ಮತ್ತು ಸಂಜಯ್ ಲೀಲಾ ಬನ್ಸಾಲಿ ಸೇರಿದಂತೆ ಬಾಲಿವುಡ್‌ನ ಕೆಲವು ಸೆಲೆಬ್ರಿಟಿಗಳು ಭಾಗವಹಿಸಲಿದ್ದಾರೆ ಎಂದೂ ಹೇಳಲಾಗುತ್ತಿದೆ.

ಸೋನಾಕ್ಷಿ ಹಾಗೂ ಜಹೀರ್ ಹಲವು ವರ್ಷಗಳಿಂದ ಸುತ್ತಾಟ ನಡೆಸುತ್ತಿದ್ದರೂ ಪ್ರೀತಿ ವಿಚಾರವನ್ನು ಒಪ್ಪಿಕೊಂಡಿಲ್ಲ. ಇತ್ತೀಚೆಗೆ ಇವರು ನಿಶ್ಚಿತಾರ್ಥ ಮಾಡಿಕೊಂಡಿದ್ದಾರೆ ಎನ್ನಲಾಗಿತ್ತು. ಇವರು ಈಗ ವಿವಾಹ ಆಗುವ ನಿರ್ಧಾರ ತೆಗೆದುಕೊಂಡಿದ್ದಾರೆ ಎನ್ನಲಾಗಿದೆ. ಸೋನಾಕ್ಷಿ 2010ರಲ್ಲಿ ʻದಬಾಂಗ್‌ʼ ಸಿನಿಮಾದಿಂದ ಬಾಲಿವುಡ್‌ಗೆ ಪದಾರ್ಪಣೆ ಮಾಡಿದರೆ, ಜಹೀರ್ ಅವರ ಮೊದಲ ಚಿತ್ರ 2019ರಲ್ಲಿ ತೆರೆ ಕಂಡ ʻನೋಟ್‌ಬುಕ್ʼ ಆಗಿತ್ತು. ʻಡಬಲ್ ಎಕ್ಸ್‌ಎಲ್‌ʼ ಸಿನಿಮಾದಲ್ಲಿ ಜಹೀರ್ ಇಕ್ಬಾಲ್ ಹಾಗೂ ಸೋನಾಕ್ಷಿ ಸಿನ್ಹಾ ಒಟ್ಟಿಗೆ ನಟಿಸಿದ್ದರು.ಜಹೀರ್ ಅವರನ್ನು ಸೋನಾಕ್ಷಿ ಭೇಟಿ ಮಾಡಿದ್ದು ಸಲ್ಮಾನ್ ಖಾನ್ ಮೂಲಕ. ಸಲ್ಲು ಹಾಗೂ ಜಹೀರ್ ಗೆಳೆಯರು. ಭೇಟಿ ಬಳಿಕ ಸೋನಾಕ್ಷಿ ಹಾಗೂ ಜಹೀರ್ ಮಧ್ಯೆ ಫ್ರೆಂಡ್​ಶಿಪ್ ಬೆಳೆಯಿತು. ಆ ಬಳಿಕ ಅದು ಪ್ರೀತಿಗೆ ತಿರುಗಿತು ಎನ್ನಲಾಗಿದೆ.

ಈ ಹಿಂದೆ ಸಲ್ಮಾನ್‌ ಖಾನ್‌ ಅವರ ಸಹೋದರಿ ಅರ್ಪಿತಾ ಖಾನ್‌ ತಮ್ಮ ಇನ್‌ಸ್ಟಾಗ್ರಾಂ ಸ್ಟೋರಿಯಲ್ಲಿ ಸೋನಾಕ್ಷಿಯನ್ನು “ಅತ್ತಿಗೆ” ಎಂದು ಕರೆದಿದ್ದರು. ಕೆಲವೇ ಕ್ಷಣಗಳಲ್ಲಿ ಆ ಸ್ಟೋರಿಯನ್ನು ಡಿಲೀಟ್‌ ಮಾಡಿದ್ದರು ಕೂಡ. ಆಗ ಸೋನಾಕ್ಷಿ ಹಾಗೂ ಜಹೀರ್‌ ನಡುವೆ ಸಂಬಂಧ ಇದೆ ಎಂಬ ಸುದ್ದಿ ವೈರಲ್‌ ಆಗಿತ್ತು.

ಸೋನಾಕ್ಷಿ ಕೊನೆಯದಾಗಿ ಸಂಜಯ್ ಲೀಲಾ ಬನ್ಸಾಲಿಯವರ ಸಿರೀಸ್‌ ಹೀರಾಮಂಡಿ: ದಿ ಡೈಮಂಡ್ ಬಜಾರ್‌ನಲ್ಲಿ ಕಾಣಿಸಿಕೊಂಡಿದ್ದರು. ಹೀರಾಮಂಡಿ: ದಿ ಡೈಮಂಡ್ ಬಜಾರ್‌ ಸದ್ಯ ನೆಟ್‌ಫ್ಲಿಕ್ಸ್‌ನಲ್ಲಿ ಸ್ಟ್ರೀಮ್ ಆಗುತ್ತಿದೆ. ಹೀರಾಮಂಡಿ: ದಿ ಡೈಮಂಡ್ ಬಜಾರ್‌ನಲ್ಲಿ ಮನಿಶಾ ಕೊಯಿರಾಲಾ, ರಿಚಾ ಚಡ್ಡಾ, ಸಂಜೀದಾ ಶೇಖ್, ಅದಿತಿ ರಾವ್ ಹೈದರಿ, ಶರ್ಮಿನ್ ಸೆಗಲ್ ಮೆಹ್ತಾ, ಫರೀದಾ ಜಲಾಲ್, ಫರ್ದೀನ್ ಖಾನ್ ಮತ್ತು ಅಧ್ಯಯನ್ ಸುಮನ್ ಪ್ರಮುಖ ಪಾತ್ರಗಳಲ್ಲಿ ನಟಿಸಿದ್ದಾರೆ.

Continue Reading

ಸಿನಿಮಾ

Kangana Ranaut: ರಾಜಕೀಯಕ್ಕಿಂತ ಸಿನಿಮಾ ಬೆಸ್ಟ್​ ಎಂದ ಕಂಗನಾ! ಪೊಲಿಟಿಕಲ್​ ಜರ್ನಿ ವಿವರಿಸಿದ ನಟಿ

Kangana Ranaut: ಕಂಗನಾ ರಣಾವತ್ ಜೂನ್ 6 ರಂದು ನವದೆಹಲಿಗೆ ಪ್ರಯಾಣಿಸುತ್ತಿದ್ದಾಗ ಚಂಡೀಗಢ ವಿಮಾನ ನಿಲ್ದಾಣದಲ್ಲಿ ಮಹಿಳಾ ಸಿಐಎಸ್ಎಫ್ ಕಾನ್ಸ್‌ಟೇಬಲ್ ಕಪಾಳಮೋಕ್ಷ ಮಾಡಿದ್ದರು. ಈ ಬಗ್ಗೆ ಸಾಕಷ್ಟು ಸುದ್ದಿಯಲ್ಲಿ ಇದ್ದರು. ಇನ್ನು ಕಂಗನಾ ಅವರ ಎಮರ್ಜೆನ್ಸಿ ಸಿನಿಮಾ ಮುಂಬರುವ ದಿನಗಳಲ್ಲಿ ಬಿಡುಗಡೆಯಾಗಬೇಕಿದೆ. ಈ ಸಿನಿಮಾದಲ್ಲಿ ಕಂಗನಾ ಭಾರತದ ಮೊದಲ ಮಹಿಳಾ ಪ್ರಧಾನಿ ಇಂದಿರಾ ಗಾಂಧಿ ಪಾತ್ರದಲ್ಲಿ ನಟಿಸಿದ್ದಾರೆ.

VISTARANEWS.COM


on

Kangana Ranaut says work in the film industry is easier than politics
Koo

ಬೆಂಗಳೂರು: ಕಂಗನಾ ರಣಾವತ್ (Kangana Ranaut) ಅವರು 2024ರ ಲೋಕಸಭಾ ಚುನಾವಣೆಯಲ್ಲಿ ಮಂಡಿ ಕ್ಷೇತ್ರದಿಂದ ಗೆದ್ದಿದ್ದಾರೆ. ಇದೀಗ ಕಂಗನಾ ಅವರು ಸಂದರ್ಶನವೊಂದರಲ್ಲಿ ರಾಜಕೀಯಕ್ಕಿಂತ ಸಿನಿಮಾಗಳಲ್ಲಿ ಕೆಲಸ ಮಾಡುವುದು ತುಂಬಾ ಸುಲಭ ಎಂದು ಹೇಳಿಕೊಂಡಿದ್ದಾರೆ. ಈ ಹಿಂದೆಯೂ ರಾಜಕೀಯಕ್ಕೆ ಸೇರಲು ಹಲವು ಆಫರ್‌ಗಳು ಬಂದಿದ್ದವು ಎಂದು ಹೇಳಿಕೊಂಡಿದ್ದಾರೆ.

ಸಂದರ್ಶನದ ವೇಳೆ ಕಂಗನಾ ಮಾತನಾಡಿ, “ರಾಜಕೀಯಕ್ಕೆ ಸೇರಲು ನನ್ನನ್ನು ಸಂಪರ್ಕಿಸಿದ್ದು ಇದೇನು ಮೊದಲಲ್ಲ. ನಾನು ಈ ಹಿಂದೆ ಹಲವಾರು ಇತರ ಆಫರ್‌ಗಳನ್ನು ಸ್ವೀಕರಿಸಿದ್ದೇನೆ. ʻಗ್ಯಾಂಗ್‌ಸ್ಟರ್ʼ ಸಿನಿಮಾ ಬಳಿಕವೇ ನನಗೆ ಆಫರ್‌ ಬಂದಿತ್ತು. ನನ್ನ ದೊಡ್ಡಪ್ಪ ಕೂಡ ಶಾಸಕರಾಗಿದ್ದರು. ಹಾಗಾಗಿ ರಾಜಕೀಯ ಹಿನ್ನೆಲೆಯ ಕುಟುಂಬ ನಮ್ಮದಾಗಿದ್ದರಿಂದ ಹಲವು ನಾಯಕರು ನಮ್ಮನ್ನು ಸಂಪರ್ಕಿಸುತ್ತಾರೆ. ಇದು ತುಂಬಾ ಸಾಮಾನ್ಯವಾಗಿದೆ. ವಾಸ್ತವವಾಗಿ, ನನ್ನ ತಂದೆಗೆ ಆಫರ್ ಬಂದಿತ್ತು. ನನ್ನ ತಂಗಿ ಆ್ಯಸಿಡ್ ದಾಳಿಯಿಂದ ಬದುಕುಳಿದ ನಂತರ ರಾಜಕೀಯ ಸೇರಲು ಆಫರ್ ಬಂದಿತ್ತುʼʼಎಂದು ಹೇಳಿಕೊಂಡಿದ್ದಾರೆ.

ರಾಜಕೀಯಕ್ಕಿಂತ ಸಿನಿಮಾಗಳಲ್ಲಿ ಕೆಲಸ ಮಾಡುವುದು ತುಂಬಾ ಸುಲಭ ಎಂದು ಹೇಳಿಕೊಂಡಿದ್ದಾರೆ ಕಂಗನಾ. ʻʻನಾನು ಹೆಚ್ಚಾಗಿ ನನ್ನ ಆಸಕ್ತಿದಾಯಕ ಕ್ಷೇತ್ರಗಳಿಗೆ ಗಮನ ಕೊಡುವ ವ್ಯಕ್ತಿ. ನಟನೆ, ಬರಹ, ನಿರ್ದೇಶನ, ಸಿನಿಮಾ ಹೀಗೆ ಎಲ್ಲದರಲ್ಲಿಯೂ ನನಗೆ ಆಸಕ್ತಿ ತುಂಬ ಇದೆ. ಇನ್ನು ರಾಜಕೀಯಕ್ಕಿಂತ ಸಿನಿಮಾಗಳಲ್ಲಿ ಕೆಲಸ ಮಾಡುವುದು ತುಂಬಾ ಸುಲಭ. ರಾಜಕೀಯದಲ್ಲಿ ತೊಂದರೆಗೊಳಗಾದ ಜನರು ಮಾತ್ರ ನಿಮ್ಮನ್ನು ನೋಡಲು ಬರುತ್ತಾರೆ. ಆದರೆ ಸಿನಿಮಾದಲ್ಲಿ ಹಾಗಲ್ಲ. ಸಿನಿಮಾ ನೋಡಲು ಹೋದವರು ಮರಳಿ ಬರುವಾಗ ನಿರಾಳರಾಗಿ ಬರುತ್ತಾರೆʼʼಎಂದರು.

ಇದನ್ನೂ ಓದಿ: Kangana Ranaut Saree Fashion: ದೇಸಿ ಸೀರೆ ನೇಯ್ದ ನೇಕಾರರಿಗೆ ಥ್ಯಾಂಕ್ಸ್ ಹೇಳಿದ ಕಂಗನಾ ರಣಾವತ್!

ಇನ್ನು ಕಂಗನಾ ಅವರ ಎಮರ್ಜೆನ್ಸಿ ಸಿನಿಮಾ ಮುಂಬರುವ ದಿನಗಳಲ್ಲಿ ಬಿಡುಗಡೆಯಾಗಬೇಕಿದೆ. ಈ ಸಿನಿಮಾದಲ್ಲಿ ಕಂಗನಾ ಭಾರತದ ಮೊದಲ ಮಹಿಳಾ ಪ್ರಧಾನಿ ಇಂದಿರಾ ಗಾಂಧಿ ಪಾತ್ರದಲ್ಲಿ ನಟಿಸಿದ್ದಾರೆ. ಎಮರ್ಜೆನ್ಸಿಯಲ್ಲಿ ಅನುಪಮ್ ಖೇರ್, ಮಹಿಮಾ ಚೌಧರಿ, ಮಿಲಿಂದ್ ಸೋಮನ್, ಶ್ರೇಯಸ್ ತಲ್ಪಾಡೆ, ವಿಶಾಕ್ ನಾಯರ್ ಮತ್ತು ದಿವಂಗತ ಸತೀಶ್ ಕೌಶಿಕ್ ಕೂಡ ಕಾಣಿಸಿಕೊಂಡಿದ್ದಾರೆ. ಎಮರ್ಜೆನ್ಸಿ ಸಿನಿಮಾದಲ್ಲಿ ಕಂಗನಾ ಅವರು ದಿವಂಗತ ಪ್ರಧಾನಿ ಇಂದಿರಾ ಗಾಂಧಿಯವರ ಪಾತ್ರದಲ್ಲಿ ಕಾಣಿಸಿಕೊಳ್ಳಲಿದ್ದಾರೆ. ರಿತೇಶ್ ಶಾ ಕಥೆಯನ್ನು ಬರೆದಿದ್ದು, ಈ ಹಿಂದೆ ಅವರು ಕಂಗನಾ ಅವರ ಕೊನೆಯ ಚಿತ್ರ ಧಾಕಡ್ ಅನ್ನು ಸಹ ಬರೆದಿದ್ದಾರೆ. ಆದರೆ ಬಾಕ್ಸ್‌ ಆಫೀಸ್‌ನಲ್ಲಿ ಸಿನಿಮಾ ಗಳಿಕೆ ಕಂಡಿರಲಿಲ್ಲ. ಅನುಪಮ್ ಖೇರ್, ಮಿಲಿಂದ್ ಸೋಮನ್, ಮಹಿಮಾ ಚೌಧರಿ, ಸತೀಶ್ ಕೌಶಿಕ್ ಮತ್ತು ಶ್ರೇಯಸ್ ತಲ್ಪಡೆ ಕೂಡ ಚಿತ್ರದಲ್ಲಿ ಪ್ರಮುಖ ಪಾತ್ರಗಳಲ್ಲಿ ಕಾಣಿಸಿಕೊಳ್ಳಲಿದ್ದಾರೆ. ಚಿತ್ರದಲ್ಲಿ ಅಟಲ್ ಬಿಹಾರಿ ವಾಜಪೇಯಿ ಪಾತ್ರವನ್ನು ಶ್ರೇಯಸ್ ತಲ್ಪಡೆ ನಿರ್ವಹಿಸಲಿದ್ದಾರೆ.

ಸಿಐಎಸ್ಎಫ್ ಕಾನ್ಸ್‌ಟೇಬಲ್ ಕಪಾಳಮೋಕ್ಷ

ಕಂಗನಾ ರಣಾವತ್ ಜೂನ್ 6 ರಂದು ನವದೆಹಲಿಗೆ ಪ್ರಯಾಣಿಸುತ್ತಿದ್ದಾಗ ಚಂಡೀಗಢ ವಿಮಾನ ನಿಲ್ದಾಣದಲ್ಲಿ ಮಹಿಳಾ ಸಿಐಎಸ್ಎಫ್ ಕಾನ್ಸ್‌ಟೇಬಲ್ ಕಪಾಳಮೋಕ್ಷ ಮಾಡಿದ್ದರು. 2020 ರಲ್ಲಿ, ಕಂಗನಾ ರಣಾವತ್‌ ಪ್ರತಿಭಟನೆಯಲ್ಲಿ ಭಾಗವಹಿಸುತ್ತಿದ್ದ ಪಂಜಾಬ್​ನ ಮಹಿಳೆಯೊಬ್ಬರನ್ನು ತಪ್ಪಾಗಿ ಅಂದಾಜಿಸಿದ್ದರು. ಅದಕ್ಕಿಂತ ಹಿಂದೆ ಶಾಹೀನ್ ಬಾಗ್​ನಲ್ಲಿ ನಡೆದ ಪೌರತ್ವ ತಿದ್ದುಪಡಿ ಕಾನೂನು (ಸಿಎಎ) ವಿರೋಧಿ ಪ್ರತಿಭಟನೆಯಲ್ಲಿ ಭಾಗಿಯಾಗಿದ್ದ ಬಿಲ್ಕಿಸ್ ಬಾನೊ ಅವರು ಎಂದುಕೊಂಡಿದ್ದರು. ಪ್ರತಿಭಟನೆಗೆ ಬರುವ ಮಹಿಳೆಯರೆಲ್ಲರೂ 100 ರೂಪಾಯಿಗೆ ಸಿಗುತ್ತಾರೆ ಎಂದು ಹೇಳಿದ್ದರು. ಇದು ದೊಡ್ಡ ವಿವಾದ ಸೃಷ್ಟಿಸಿತ್ತು. ಅಂದ ಹಾಗೆ ಕಂಗನಾಗೆ ಹೊಡೆದ ಕಾನ್​ಸ್ಟೇಬಲ್​ ಕುಲ್ವಿಂದರ್ ಕೌರ್​ ತಾಯಿಯೂ ಆ ಪ್ರತಿಭಟನೆಯಲ್ಲಿ ಭಾಗವಹಿಸಿದ್ದರು. ಕಂಗನಾ ಹೇಳಿಕೆಯಿಂದ ಕೋಪಗೊಂಡಿದ್ದ ಅವರು ಪ್ರತಿಕಾರ ತೀರಿಸಲು ಕಾದಿದ್ದರು. ಅಂತೆಯೇ ಚಂಡಿಗಢದಲ್ಲಿ ತಪಾಸಣಾ ಕೇಂದ್ರಕ್ಕೆ ಬರುತ್ತಿದ್ದಂತೆ ಕಪಾಳ ಮೋಕ್ಷ ಮಾಡಿದ್ದಾರೆ.

Continue Reading

ದೇಶ

Maharaj Movie: `ಮಹಾರಾಜ್’ ಚಲನಚಿತ್ರ ನಿಷೇಧಕ್ಕೆ ಹಿಂದೂ ಜನಜಾಗೃತಿ ಸಮಿತಿ ಆಗ್ರಹ

Maharaj Movie: ಹಿಂದೂ ಸಂತರು ಮತ್ತು ಸಂಪ್ರದಾಯಗಳ ತೇಜೋವಧೆ ಮಾಡುವ `ಮಹಾರಾಜ್’ ಚಲನಚಿತ್ರವನ್ನು ಕೂಡಲೇ ನಿಷೇಧಿಸಬೇಕು ಎಂದು ಆಗ್ರಹಿಸಿ, ಪುಣೆಯಲ್ಲಿ ಹಿಂದೂ ಜನಜಾಗೃತಿ ಸಮಿತಿಯ ವತಿಯಿಂದ ಬುಧವಾರ ಆಂದೋಲನ ನಡೆಸಲಾಯಿತು.

VISTARANEWS.COM


on

Hindu Jana Jagruti Samiti demands immediate ban on Maharaj movie
Koo

ಪುಣೆ: ಹಿಂದೂ ಸಂತರು ಮತ್ತು ಸಂಪ್ರದಾಯಗಳ ತೇಜೋವಧೆ ಮಾಡುವ `ಮಹಾರಾಜ್’ ಚಲನಚಿತ್ರವನ್ನು (Maharaj Movie) ಕೂಡಲೇ ನಿಷೇಧಿಸಬೇಕು ಎಂದು ಆಗ್ರಹಿಸಿ, ಹಿಂದೂ ಜನಜಾಗೃತಿ ಸಮಿತಿಯ ವತಿಯಿಂದ ಬುಧವಾರ ಆಂದೋಲನ ನಡೆಸಲಾಯಿತು.

ಭಾರತವು ಸಾಧು-ಸಂತರ ಭೂಮಿಯಾಗಿದೆ. ಸಂತರು ಜಗತ್ತಿನಾದ್ಯಂತ ಸಂಚರಿಸಿ, ಭಾರತೀಯ ಸಂಸ್ಕೃತಿ, ಧರ್ಮ, ಜ್ಞಾನ, ಕಲೆ, ಸಭ್ಯತೆ, ಸದಾಚಾರ ಹಾಗೂ ಭಗವದ್ ಭಕ್ತಿ ಕಲಿಸಿ ಸಮಾಜಕ್ಕೆ ಆದರ್ಶ ಜೀವನವನ್ನು ನಡೆಸಲು ಪ್ರೋತ್ಸಾಹಿಸುತ್ತಿದ್ದಾರೆ. ಹೀಗಿರುವಾಗ ನಟ ಆಮೀರ್ ಖಾನ್ ಅವರ ಪುತ್ರ ಜುನೈದ್ ಖಾನ್ ನಟಿಸಿರುವ ಯಶ್‌ ರಾಜ್ ಫಿಲ್ಮ್ಸ್ ನಿರ್ಮಾಣದ ‘ಮಹಾರಾಜ್” ಚಲನಚಿತ್ರನಲ್ಲಿ ಸಾಧುಸಂತರನ್ನು ದುರಾಚಾರಿಗಳು, ಗೂಂಡಾಗಳೆಂದು ಬಿಂಬಿಸಿ ಅವರ ತೇಜೋವಧೆ ಮಾಡಲಾಗಿದೆ ಎಂದು ಹಿಂದೂ ಜನಜಾಗೃತಿ ಸಮಿತಿಯು ಆರೋಪಿಸಿದ್ದು,. ಈ ಹಿನ್ನಲೆಯಲ್ಲಿ ಈ ಚಲನಚಿತ್ರವನ್ನು ಕೂಡಲೇ ನಿಷೇಧಿಸಬೇಕು ಎಂದು ಹಿಂದೂ ಜನಜಾಗೃತಿ ಸಮಿತಿಯ ವತಿಯಿಂದ ಆಗ್ರಹಿಸಲಾಯಿತು.

ಇದನ್ನೂ ಓದಿ: Karnataka Weather : ಕರಾವಳಿ ಸೇರಿ 11 ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್‌; ಮಳೆ ಜತೆಗೆ ರಭಸವಾಗಿ ಬೀಸಲಿದೆ ಗಾಳಿ

ಪುಣೆಯ ಕೊಥರೂಡ ಎಂಬಲ್ಲಿನ ಶ್ರೀ ಶಿವಾಜಿ ಮಹಾರಾಜರ ಪುತ್ಥಳಿಯ ಸಮೀಪ ಬುಧವಾರ ಆಂದೋಲನ ನಡೆಸಿ ಒತ್ತಾಯಿಸಲಾಯಿತು. ಆಂದೋಲನದಲ್ಲಿ ಹಿಂದೂ ಜನಜಾಗೃತಿ ಸಮಿತಿಯ ಪರಾಗ ಗೋಖಲೆ ಅವರ ನೇತೃತ್ವದಲ್ಲಿ ಸಮವಿಚಾರಿ ಸಂಘಟನೆಗಳೂ ಪಾಲ್ಗೊಂಡಿದ್ದವು.

ಇದನ್ನೂ ಓದಿ: Benefits Of Eating Guava: ರೋಗ ನಿರೋಧಕ ಶಕ್ತಿ ಹೆಚ್ಚಿಸಿಕೊಳ್ಳಬೇಕೆ? ಸೀಬೆಕಾಯಿ ತಿನ್ನಿ!

ಈ ಚಲನಚಿತ್ರದಲ್ಲಿ ಹಿಂದೂಗಳ ಧಾರ್ಮಿಕ ಭಾವನೆಗಳಿಗೆ ಧಕ್ಕೆ ತರಲು ಪ್ರಯತ್ನಿಸಲಾಗಿದೆ. ಕೇಂದ್ರ ಸರ್ಕಾರವು ಕೂಡಲೇ ಈ ಚಲಚಿತ್ರವನ್ನು ನಿಷೇಧಿಸಬೇಕು. ಅಲ್ಲದೆ, ದೇವತೆ, ಧರ್ಮ, ಸಂತರ ಅವಹೇಳನ ತಡೆಯಲು ದೇಶಾದ್ಯಂತ ‘ಧರ್ಮನಿಂದನೆ ತಡೆ ಕಾನೂನು’ಜಾರಿಗೊಳಿಸಬೇಕು ಎಂದು ಹಿಂದೂ ಜನಜಾಗೃತಿ ಸಮಿತಿಯ ವತಿಯಿಂದ ಆಗ್ರಹಿಸಲಾಯಿತು.

Continue Reading
Advertisement
NEET UG Result 2024
ಶಿಕ್ಷಣ4 seconds ago

NEET UG Result 2024: ಏನಿದು ನೀಟ್‌ ವಿವಾದ? ಗ್ರೇಸ್‌ ಅಂಕ ಕೊಟ್ಟಿದ್ಯಾಕೆ? ಮರು ಪರೀಕ್ಷೆ ಮಾಡೋದ್ಯಾಕೆ?

Actor Darshan
ಕರ್ನಾಟಕ7 mins ago

Actor Darshan: ಅಪ್ಪನನ್ನು ಬೈದಿದ್ದಕ್ಕೆ ಥ್ಯಾಂಕ್ಸ್‌ ಎಂದ ದರ್ಶನ್‌ ಪುತ್ರ ವಿನೀಶ್;‌ ಪೋಸ್ಟ್‌ನಲ್ಲಿ ಇನ್ನೇನಿದೆ?

Viral Video
ವೈರಲ್ ನ್ಯೂಸ್41 mins ago

Viral Video: ಮಗನಿಗೆ ಮುಸಲ್ಮಾನರ ಕ್ಯಾಪ್‌ ಹಾಕಿದ ನಟಿ; ಸೋಷಿಯಲ್‌ ಮೀಡಿಯಾದಲ್ಲಿ ಚರ್ಚೆ!

Donkey Population In Pak
ವಿದೇಶ51 mins ago

Donkey Population In Pak: ಹೆಚ್ಚುಹೆಚ್ಚು ಕತ್ತೆಗಳನ್ನು ಸಾಕಿ, ಆರ್ಥಿಕ ಬಿಕ್ಕಟ್ಟಿನಿಂದ ಪಾರಾಗಿ; ಪಾಕ್‌ಗೆ ಚೀನಾ ಸಲಹೆ!

Celebrity Fashion
ಫ್ಯಾಷನ್58 mins ago

Celebrity Fashion: ಬ್ಲೇಜರ್‌ನಲ್ಲಿ ನಟ ಸುದೀಪ್‌ ಪುತ್ರಿ ಸಾನ್ವಿ ಕ್ಲಾಸಿ ಲುಕ್‌!

There is a Taliban government in the state Opposition party leader R Ashok alleges
ಬೆಂಗಳೂರು1 hour ago

R Ashok: ರಾಜ್ಯದಲ್ಲಿರುವುದು ತಾಲಿಬಾನ್‌ ಸರ್ಕಾರ; ಆರ್. ಅಶೋಕ್‌ ಆರೋಪ

Hindu Girl Kidnaping
Latest1 hour ago

Hindu Girl Kidnaping: ಪಾಕ್‌ನಲ್ಲಿ ಹಿಂದೂ ಬಾಲಕಿಯ ಅಪಹರಿಸಿ ಇಸ್ಲಾಂಗೆ ಮತಾಂತರ, ಬಲವಂತದ ಮದುವೆ

Glasses or Lenses
ಆರೋಗ್ಯ1 hour ago

Glasses or Lenses?: ಕನ್ನಡಕವೋ ಕಾಂಟ್ಯಾಕ್ಟ್‌ ಲೆನ್ಸ್‌ ಬೇಕೋ? ಇದನ್ನು ಓದಿ, ನೀವೇ ನಿರ್ಧರಿಸಿ!

SSLC examination-2 to begin from tomorrow at over 700 centres
ಬೆಂಗಳೂರು1 hour ago

SSLC Examination 2 : 700ಕ್ಕೂ ಹೆಚ್ಚು ಕೇಂದ್ರಗಳಲ್ಲಿ ನಾಳೆಯಿಂದ ಎಸ್‌ಎಸ್‌ಎಲ್‌ಸಿ ಪರೀಕ್ಷೆ-2 ಶುರು

weight lifting
ಪ್ರಮುಖ ಸುದ್ದಿ1 hour ago

Weight Lifting: ಮೊಣಕಾಲಿನ ಸಂಧಿವಾತವಿದ್ದರೂ 68ನೇ ವಯಸ್ಸಿನಲ್ಲಿ 60 ಕೆಜಿ ಭಾರ ಎತ್ತುವ ಅಜ್ಜಿ!

Sharmitha Gowda in bikini
ಕಿರುತೆರೆ8 months ago

Geetha Serial Kannada: ನಿದ್ದೆ ಕದ್ದ ಚೋರಿ! ನಟಿ `ಭಾನುಮತಿ’ ಹಾಟ್‌ ಪೋಟೊಗಳಿಗೆ ಫ್ಯಾನ್ಸ್ ಫುಲ್ ಫಿದಾ

Kannada Serials
ಕಿರುತೆರೆ8 months ago

Kannada Serials TRP: 2ನೇ ಸ್ಥಾನದಲ್ಲಿ 2 ಧಾರಾವಾಹಿಗಳು; ಟಿಆರ್‌ಪಿ ರೇಸ್‌ನಲ್ಲಿಲ್ಲ ಭಾಗ್ಯಲಕ್ಷ್ಮೀ!

Bigg Boss- Saregamapa 20 average TRP
ಕಿರುತೆರೆ8 months ago

Kannada Serials TRP: ಏಳನೇ ಸ್ಥಾನಕ್ಕೆ ʻಅಮೃತಧಾರೆʼ ಕುಸಿತ; ಬಿಗ್‌ ಬಾಸ್‌-ಸರಿಗಮಪ ಟಿಆರ್‌ಪಿ ಎಷ್ಟು?

galipata neetu
ಕಿರುತೆರೆ7 months ago

Kanyadana Serial: ಕಿರುತೆರೆಗೆ ಮತ್ತೆ ಎಂಟ್ರಿ ಕೊಟ್ಟ ʻಗಾಳಿಪಟʼ ಖ್ಯಾತಿಯ ʻನೀತುʼ!

Kannada Serials
ಕಿರುತೆರೆ9 months ago

Kannada Serials TRP: ನಾಲ್ಕನೇ ಸ್ಥಾನಕ್ಕೆ ಕುಸಿತ ಕಂಡ ʻಸೀತಾ ರಾಮʼ; ಟಿಆರ್‌ಪಿ ರೇಸ್‌ಗೆ ʻಭಾಗ್ಯಲಕ್ಷ್ಮಿʼ ಬ್ಯಾಕ್‌!

Kannada Serials
ಕಿರುತೆರೆ8 months ago

Kannada Serials TRP: ಟಿಆರ್‌ಪಿಯಲ್ಲಿ ʻಭಾಗ್ಯಲಕ್ಷ್ಮೀʼ ಹವಾ; ʻಪುಟ್ಟಕ್ಕನ ಮಕ್ಕಳುʼ ಧಾರಾವಾಹಿಗೆ ಸಂಕಷ್ಟ!

Bigg Boss' dominates TRP; Sita Rama fell to the sixth position
ಕಿರುತೆರೆ8 months ago

Kannada Serials TRP: ಟಿಆರ್‌ಪಿಯಲ್ಲಿ ʻಬಿಗ್ ಬಾಸ್ʼದೇ ಮೇಲುಗೈ; 6ನೇ ಸ್ಥಾನಕ್ಕೆ ಕುಸಿದ ʻಸೀತಾ ರಾಮʼ

geetha serial Dhanush gowda engagement
ಕಿರುತೆರೆ6 months ago

Dhanush Gowda: ಗೀತಾ ಧಾರಾವಾಹಿ ನಟನ ನಿಶ್ಚಿತಾರ್ಥ; ಭವ್ಯಾಳ ಕಮೆಂಟ್‌ ಬಾಕ್ಸ್‌ ಆಫ್‌!

varun
ಕಿರುತೆರೆ7 months ago

Brindavana Serial: ʼಬೃಂದಾವನʼ ಧಾರಾವಾಹಿಯಲ್ಲಿ ದೊಡ್ಡ ಟ್ವಿಸ್ಟ್‌; ಪ್ರಮುಖ ಪಾತ್ರಧಾರಿಯೇ ಬದಲು

Kannada Serials
ಕಿರುತೆರೆ9 months ago

Kannada Serials TRP: ಟಿಆರ್‌ಪಿಯಲ್ಲಿ ಏರಿಕೆ ಕಂಡ ʻಅಮೃತಧಾರೆʼ; ʻಗಟ್ಟಿಮೇಳʼಕ್ಕೆ ನಾಲ್ಕನೇ ಸ್ಥಾನ!

karnataka weather Forecast
ಮಳೆ2 days ago

Karnataka Weather : ಭಾರಿ ಮಳೆಗೆ ಗುಡ್ಡದಿಂದ ಉರುಳಿ ಬಿದ್ದ ಬಂಡೆಗಲ್ಲು; ಬೆಂಗಳೂರಲ್ಲೂ ಸಂಜೆ ವರ್ಷಧಾರೆ

actor Darshan
ಚಿತ್ರದುರ್ಗ2 days ago

Actor Darshan: ರೇಣುಕಾ ಸ್ವಾಮಿ ಕೊಲೆ ಕೇಸ್‌ನಲ್ಲಿ ದರ್ಶನ್‌ ಅರೆಸ್ಟ್‌; ಪ್ರಕರಣವನ್ನು ಸಿಬಿಐಗೆ ವಹಿಸಲು ಒತ್ತಾಯ

Actor Darshan gets a series of questions from the police
ಸಿನಿಮಾ2 days ago

Actor Darshan : ಪವಿತ್ರಗೌಡ ಬಗ್ಗೆ ಪೋಸ್ಟ್‌ ಮಾಡಿದ್ರೆ ನಿಮಗ್ಯಾಕೆ ಕೋಪ? ದರ್ಶನ್‌ಗೆ ಪೊಲೀಸರ ಪ್ರಶ್ನೆಗಳ ಸುರಿಮಳೆ

Actor Darshan
ಸಿನಿಮಾ2 days ago

Actor Darshan : ದರ್ಶನ್‌ ಜೈಲಿಗೆ ಹೋಗುತ್ತಿರುವುದು ಇದೇ ಮೊದಲಲ್ಲ; ನಟನ ಮೇಲಿವೆ ಹತ್ತಾರು ಕೇಸ್‌ಗಳು!

Saptami Gowda
ಸಿನಿಮಾ2 days ago

Saptami Gowda : ಯುವ ಪತ್ನಿ ಶ್ರೀದೇವಿ ವಿರುದ್ಧ ಮಾನಹಾನಿ ಕೇಸ್; ಕಾನೂನು ಹೋರಾಟಕ್ಕೆ ಮುಂದಾದ ನಟಿ ಸಪ್ತಮಿ ಗೌಡ!

Karnataka weather Forecast
ಮಳೆ3 days ago

Karnataka Weather : ಭಾರಿ ಮಳೆಗೆ ಮನೆ ಗೋಡೆ ಕುಸಿದು ಎಮ್ಮೆಗಳು ಸಾವು; ಆಕಳಿನ ಜೀವ ತೆಗೆದ ವಿದ್ಯುತ್‌ ತಂತಿ

Karnataka weather Forecast
ಮಳೆ6 days ago

Karnataka weather : ಮಳೆಯಲ್ಲೆ ತಪಸ್ಸಿಗೆ ಕುಳಿತ ವೃದ್ಧ; ಇನ್ನೊಂದು ವಾರ ನಾನ್‌ ಸ್ಟಾಪ್‌ ವರುಣನ ಅಬ್ಬರ

Sigandur launch
ಶಿವಮೊಗ್ಗ6 days ago

Sigandur launch: ಸಿಗಂದೂರು ಲಾಂಚ್‌ನಲ್ಲಿ ಭಾರಿ ವಾಹನಗಳಿಗೆ ನಿರ್ಬಂಧ

Karnataka Rain
ಮಳೆ1 week ago

Karnataka Rain : ಭಾರಿ ಮಳೆಗೆ ಮರ ಬಿದ್ದು ಮೇಕೆಗಳು ಸಾವು; ಸಿಡಿಲಿಗೆ ಎಲೆಕ್ಟ್ರಿಕ್‌ ಅಂಗಡಿ ಸುಟ್ಟು ಭಸ್ಮ

Lok Sabha Election Result 2024 Live
ದೇಶ1 week ago

Lok Sabha Election Result 2024 Live: ಲೋಕಸಭೆ ಚುನಾವಣೆ ಫಲಿತಾಂಶದ ಲೈವ್‌ ಇಲ್ಲಿ ವೀಕ್ಷಿಸಿ

ಟ್ರೆಂಡಿಂಗ್‌