ವಿಸ್ತಾರ ಯುಗಾದಿ ಕಥಾಸ್ಪರ್ಧೆ: ಟಾಪ್‌ 25ರ ಗೌರವ ಪಡೆದ ಕಥೆ: ಸೀಕ್ರೆಟ್ ಸ್ಯಾಂಟಾ - Vistara News

ಕಲೆ/ಸಾಹಿತ್ಯ

ವಿಸ್ತಾರ ಯುಗಾದಿ ಕಥಾಸ್ಪರ್ಧೆ: ಟಾಪ್‌ 25ರ ಗೌರವ ಪಡೆದ ಕಥೆ: ಸೀಕ್ರೆಟ್ ಸ್ಯಾಂಟಾ

ದೇಹದ ಅದೊಂದು ಭಾಗವಿಲ್ಲದಿದ್ದರೆ ಏನು ಮಹಾ? ನಿನ್ನೊಟ್ಟಿಗೆ ಚೆಂದವಾಗಿಯೇ ಬಾಳುವೆ, ಅವರಿವರು ಮಾತಿನ ಕಲ್ಲೆಸೆಯಲು ಬಿಡಲಾರೆ ಎಂಬ ಭಾವನೆಯನ್ನು ಹೆಂಡತಿಗೆ ದಾಟಿಸಬೇಕಿತ್ತು ಅವನಿಗೆ. ಆದರೆ ಅದು ಅಷ್ಟು ಸುಲಭವೇ?

VISTARANEWS.COM


on

secret santa short story
ಮಹತ್ವದ, ಕುತೂಹಲಕರ ಸುದ್ದಿಗಾಗಿ ಫಾಲೊ ಮಾಡಿ
Koo
purnima bhat sannakeri

:: ಪೂರ್ಣಿಮಾ ಭಟ್‌ ಸಣ್ಣಕೇರಿ

‘ಆರ್ ಯೂ ಔಟ್ ಆಫ್ ಯುವರ್ ಮೈಂಡ್ ಸನ್ನೀ?’ ಎಂದು ಸುಮಾರು ಕಿರಿಚಿದ ಹಾಗೇ ಮಾತಾಡಿದ ನನ್ನ ಧ್ವನಿ ಇನ್ನೂ ತಾರಕಕ್ಕೇ ಏರತೊಡಗಿತು.

‘ಬ್ರೆಸ್ಟ್ ರೀಕನ್‌ಸ್ಟ್ರಕ್ಷನ್, ನಿಪ್ಪಲ್ ಕನ್‌ಸ್ಟ್ರಕ್ಷನ್, ಬೂಬ್ಸ್ ಶೇಪಿಂಗ್… ಇನ್ನೂ ಏನಾದರೂ ಉಳಿದಿದ್ಯಾ ಇಲ್ಲಿಗೇ ಮುಗೀತಾ ನಿನ್ನ ಲಿಸ್ಟು?’ ನನ್ನ ಇಡೀ ದೇಹ ಥರಗುಡುತ್ತಿತ್ತು. ಈ ಎರಡು ವರ್ಷಗಳಲ್ಲಿ ಇಷ್ಟು ಧ್ವನಿ ಎತ್ತರಿಸಿ ಮಾತನಾಡಿದ್ದು ಇದು ಮೊದಲನೇ ಸಲವಾಗಿತ್ತು. ಒಂದೇ ಧ್ಯಾನದಲ್ಲಿ ತಾಳ್ಮೆ ಮೀರದ ಹಾಗೆ ತಾಸುಗಟ್ಟಲೇ ಹಿಡಿದ ಭಾರದ ಡಂಬೆಲ್ಸ್ ಸಮತೋಲನ ತಪ್ಪಿ ಕಾಲ ಮೇಲೆ ಬಿದ್ದ ಅನುಭವ ನನಗೆ.

ಮಂಚದ ಬುಡದಲ್ಲಿನ ಹೆಡ್ ಬೋರ್ಡಿಗೆ ಬೆನ್ನು ಆನಿಸಿದ್ದ ಸನ್ಮುಕ್ತಾ ಇವತ್ತು ಒಂದು ತೀರ್ಮಾನ ಆಗಲೇಬೇಕೆಂದು ಅಲ್ಲಿ ಬೇರುಬಿಟ್ಟು ಕುಳಿತಂತೆ ಇದ್ದಳು. ಬಲಗೈ ಎದೆಯ ನಡುವೆ ಹಾದು ಎಡದೋಳನ್ನು ಮೆಲ್ಲನೆ ಸವರುತ್ತಿತ್ತು. ಚಾಚಿದ ಕಾಲಿನ ಬೆರಳುಗಳನ್ನು ಆಗಾಗ ಸುರುಳಿ ಮಾಡಿ ನೆಟ್ಟಗಾಗಿಸುತ್ತಿದ್ದಳು ಅವಳಿಗೇ ಗೊತ್ತಿಲ್ಲದಂತೆ.

‘ನನಗೆ ಜಾಸ್ತಿ ಪೊಯಟಿಕ್ ಆಗಿ ಮಾತಾಡಲು ಬರೋದಿಲ್ಲ ಕಣೋ. ನನ್ನ ಫೀಲಿಂಗ್ಸ್ ನಿನಗೆ ಹೇಗೆ ಅರ್ಥ ಮಾಡಿಸಲಿ? ನನ್ನ ಕಡೆಯಿಂದ ಡಿಸೈಡ್ ಮಾಡಿಯಾಗಿದೆ. ತಾಸುಗಟ್ಟಲೆ ರೀಸರ್ಚ್ ಮಾಡಿದ್ದೇನೆ. ಎರಡು ಪ್ಲಾಸ್ಟಿಕ್ ಸರ್ಜನ್ ಜತೆ ಸಪರೇಟ್ ಆಗಿ ಮಾತಾಡಿದ್ದೇನೆ. ನಿನಗೆ ಕಾಣ್ತಿರೋ ಯಾವ ಕಾಂಪ್ಲಿಕೇಷನ್ನೂ ನನಗೆ ಕಾಣ್ತಿಲ್ಲ. ಹಠ ಯಾಕೆ ಮಾಡ್ತೀಯಾ ಅಮ್ಮೂ?’ ಸಮಾಧಾನದಲ್ಲೇ ಹೇಳಿದರೂ ಮಾತುಗಳು ಮಂಜಿನ ಚೂರಿಯಂತೆ ಹರಿತವಾಗಿದ್ದವು.

ಛೇ! ನಾನ್ಯಾಕೆ ಸವಕಲು ಸಿಮಿಲಿಗಳನ್ನೇ ನೆನಪಿಸಿಕೊಳ್ಳುತ್ತಿದ್ದೇನೆ ಎಂದು ಸಶಬ್ದವಾಗಿ ಹಣೆ ಬಡಿದುಕೊಂಡೆ.

‘ಅದ್ಯಾಕೆ ಹಣೆ ಚಚ್ಚಿಕೊಳ್ತೀಯಾ? ಮೊದಲ ಸಲ ಬ್ರಾ ಹಾಕಿಕೊಂಡ ಸಂಭ್ರಮ, ಹೈಸ್ಕೂಲಿನಲ್ಲಿ ಯೂನಿಫಾರ್ಮಿನ ಚೌಕುಳಿ ಬ್ಲೌಸಿನ ಸಂದಿಯಲ್ಲಿ ಇಣುಕಿದ ಸ್ಟ್ರಾಪ್ ಒಳತಳ್ಳುವಾಗ ಆದ ನಾಚಿಕೆ, ಧ್ರುವನಿಗೆ ಕೊನೆಯ ಬಾರಿ ಫೀಡ್ ಮಾಡುವಾಗ ನೀನು ಮಾಡಿದ ವಿಡಿಯೋ ನನಗೆ ಕೊಡುವ ಖುಶಿ.. ಇದೆಲ್ಲ ಭಾವನೆಯನ್ನ – ಹೌ ಕೆನ್ ಐ ಪಾಸ್ ದೆಮ್ ಟೂ ಯೂ? ಹೇಳಿಲ್ವಾ ಕವಿ ಥರ ವಿವರಣೆ ಕೊಡೋದು ನನಗಾಗಲ್ಲ ಅಂತ’ ಈ ಬಾರಿ ಧ್ವನಿ ಆದ್ರವಾಗಿತ್ತು.

‘ಈ ಎರಡು ವರ್ಷ ಅನುಭವಿಸಿದ್ದು ಸಾಲದಾ? ಇನ್ನಷ್ಟು ಆಸ್ಪತ್ರೆ ಓಡಾಟ, ಕೌಂಟ್‌ಲೆಸ್ ಅಪಾಯಿಂಟ್ಮೆಂಟ್ಸ್, ಫೋನಿನಲ್ಲಿ ಇನ್ನೂ ಒಂದಷ್ಟು ಪಿಲ್ಸ್ ರಿಮೈಂಡರ್ಸ್ ಇದೆಲ್ಲಾ ಬೇಕಾ ಸನ್ನೀ? ಸ್ವಲ್ಪ ಯೋಚನೆ ಮಾಡು. ಹೀಗೆ ಆರಾಮಾಗಿದ್ದುಬಿಡೋಣ’ ಮಾತು ಮುಗಿಸೋಣವೆಂದುಕೊಂದಷ್ಟೂ ಮೆದುಳಿಗೂ ನಾಲಿಗೆಗೂ ಲಿಂಕ್ ತಪ್ಪಿದಂತಿತ್ತು.

‘ಗಂಟೆ ಆಗ್ಲೇ ಎಂಟು. ನಿಂಗೆ ಯಾವತ್ತಿನಂತೆ ಮೆಕ್ಸಿಕನ್ ಬರೀಟೋ ಬೌಲಾ? ನಾನಿವತ್ತು ಸೂಪ್ ಮತ್ತು ಸಲಾಡ್ ಮಾತ್ರ’ ಎಂದು ಫೋನಿತ್ತಿಕೊಂಡಳು, ಮುಂದೆನಿದೆ ಮಾತಾಡುವುದಕ್ಕೆ ಎನ್ನುವಂತೆ.

+++

ಬಾಲ್ಕನಿಗೆ ಬಂದು ಕೂತೆ. ಎರಡು ವಾರದ ಹಿಂದೆ ಈ ಬ್ರೆಸ್ಟ್ ರೀಕನ್‌ಸ್ಟ್ರಕ್ಷನ್ ವಿಷಯವನ್ನು ಮೊದಲ ಬಾರಿ ಸನ್ಮುಕ್ತಾ ಪ್ರಸ್ತಾಪ ಮಾಡಿದಾಗ ಅರ್ಧ ವಿಷಯ ತಲೆಯೊಳಗೆ ಹೋಗಲೇ ಇಲ್ಲ. ಒಂದೂವರೆ ದಶಕದ ದಾಂಪತ್ಯದಲ್ಲೂ ಅಷ್ಟೆ, ಅವಳ ಪಾತ್ರ ಜಾಸ್ತಿ ಇದ್ದುದು ಚಿಂತನ ಮಂಥನದಲ್ಲಿ. ನನ್ನ ಪಾತ್ರ ಕಾರ್ಯ ನೆರವೇರಿಸುವಲ್ಲಿ.

ದೊಡ್ಡ ಸಾಫ್ಟ್ವೇರ್ ಕಂಪನಿಯಲ್ಲಿ ಲಕ್ಷ ಸಂಪಾದಿಸುತ್ತಿದ್ದರೂ ನನ್ನ ಹುಕಿಗಾಗಿ ಸಣ್ಣದೊಂದು ಪ್ರಾಡಕ್ಟ್ ಶುರುಮಾಡಿ, ಗೆಳೆಯರಿಂದ, ಕಲೀಗ್‌ಗಳಿಂದ ಮೆಚ್ಚುಗೆ ಪಡೆದುಕೊಂಡು ಅಷ್ಟಕ್ಕೇ ಸುಮ್ಮನಾಗಿ ಕುಳಿತಿದ್ದೆ ನಾನು. ಸನ್ಮುಕ್ತಾ ಯಾವ್ಯಾವ ದಾರಿಯಲ್ಲಿ ಹೋದರೆ ಗಮ್ಯ ಸುಗಮವಾಗಬಹುದು, ಎಲ್ಲಿ ನನ್ನ ಪ್ರಾಡಕ್ಟ್ ಒಂದು ಕಂಪನಿಯಾಗಿ ಬೆಳೆಯಬಲ್ಲದು ಎಂಬುದನ್ನೆಲ್ಲ ಲೆಕ್ಕಾಚಾರ ಹಾಕಿದವಳು. ಕೋಟಿಗಟ್ಟಲೆ ಇನ್‌ವೆಸ್ಟ್‌ಮೆಂಟಿನ ಕಠಿಣ ದಾರಿಯನ್ನು ಹೂಹಾದಿಯನ್ನಾಗಿಸಿದವಳು.

ಎರಡು ವರ್ಷದ ಹಿಂದೆ ಒಂದು ಸುಡು ಬೇಸಿಗೆಯಲ್ಲಿ ಸನ್ಮುಕ್ತಾಳಿಗೆ ಬ್ರೆಸ್ಟ್ ಕ್ಯಾನ್ಸರ್ ಇರುವುದು ಪತ್ತೆಯಾದದ್ದು. ಸ್ವಲ್ಪಕಾಲ ದಿಕ್ಕುತಪ್ಪಿದ ಜೋಡಿಹಕ್ಕಿಗಳಂತೆ ಅಲ್ಲಿಲ್ಲಿ ಅಲೆದರೂ ಹೇಗೋ ಮತ್ತೆ ಗೂಡನ್ನು ಕಂಡುಕೊಂಡಿದ್ದೆವು. ರೇಡಿಯೇಶನ್, ಕೀಮೋ, ಸ್ಕ್ಯಾನುಗಳು, ಡಯೆಟ್ ಪ್ಲಾನುಗಳು, ಮಾತ್ರೆಗಳು ಈ ಎಲ್ಲವಕ್ಕೂ ನಮ್ಮ ದಿನಚರಿಯನ್ನು ಹೊಂದಿಸಿಕೊಂಡಿದ್ದೆವು. ದಿನವೂ ಸಂಭವಿಸುವ ರಾತ್ರಿಯ ವಿಹಾರ ನಮ್ಮಿಬ್ಬರಿಗೂ ಥೆರಪ್ಯುಟಿಕ್. ಮಾತ್ರೆಯ ಭಾದೆ ತಾಳದೆ ಗೋಳೆಗುಟ್ಟಿ ಸನ್ಮುಕ್ತಾ ಅತ್ತ ರಾತ್ರಿಗಳಲ್ಲಿ ನಿದ್ದೆ ನನ್ನ ಸುತ್ತ ಸುಳಿಯುತ್ತಲಿರಲಿಲ್ಲ. ಮಾರನೆಯ ದಿನ ಮತ್ತೆ ಅವಳ ಕಣ್ಣಲ್ಲಿ ಹೊಳಪು ಕಂಡರೆ ನಾನು ಅಂದು ಸ್ವತಃ ಸೂರ್ಯ.

ಕಾಲಕ್ಕೆ ಕೂಡ್ರುವ ಪದ್ಧತಿಯಿಲ್ಲವಲ್ಲ. ಮ್ಯಾಸ್ಟೆಕ್ಟಮಿ ಪ್ರೊಸೀಜರ್ ನಂತರ ಸಪಾಟಾದ ಒಂದು ಭಾಗದ ಎದೆಯನ್ನು ನೋಡಿದಾಗಲೆಲ್ಲ ನಾನು ಸನ್ಮುಕ್ತಾಳ ಕಣ್ಣನ್ನು ತುಸು ತಪ್ಪಿಸಿದ್ದನ್ನು ಬಿಟ್ಟರೆ ಬಾಕಿ ಎಲ್ಲವೂ ನಾರ್ಮಲ್ ಎಂದುಕೊಂಡಿದ್ದೆವು ನಾವಿಬ್ಬರೂ. ಹದಿನೈದು ವರ್ಷಗಳ ಏರಿಳಿತಗಳ ಬಂಧ ನಮ್ಮನ್ನು ಹಿತವಾಗಿ ನೇವರಿಸುತ್ತಿತ್ತು. ಅದಕ್ಕೇ ಉಳಕಿ ಎಲ್ಲ ನಾರ್ಮಲ್ ನಾರ್ಮಲ್.

ಅದೆಲ್ಲಿಂದ ತಲೆಯಲ್ಲಿ ಹುಳು ಬಿಟ್ಟುಕೊಂಡಳೋ ಗೊತ್ತಿಲ್ಲ ಸನ್ಮುಕ್ತಾ. ಸಪಾಟಾದ ಎದೆಗೆ ಬ್ರೆಸ್ಟ್ ರೀಕನ್‌ಸ್ಟ್ರಕ್ಷನ್ ಸರ್ಜರಿ ಆಗಲೇಬೇಕೆಂದು ಹಟ ಹಿಡಿದಿದ್ದಾಳೆ. ಅವಳೇ ಹೇಳಿದ್ದಲ್ಲವೇ ನನಗೆ, ಅವಳ ಡೆವೆಲಪ್‌ಮೆಂಟ್ ಟೀಮಿನ ಅಮೇರಿಕನ್ ಕೌಂಟರ್‌ಪಾರ್ಟ್ ಮೆಗ್ ಮೊದಲು ಈ ಬಗ್ಗೆ ಹೇಳಿದ್ದು ಎಂದು..

ಶುರುವಿನಲ್ಲಿ ಸನ್ಮುಕ್ತಾ ಈ ಬಗ್ಗೆ ಮಾತಾಡಿದಾಗ ನಾನೂ ಹಾರಿಕೆಯ ಉತ್ತರ ಕೊಟ್ಟೆ. ಮಾತು ಮರೆಸಲು ನೋಡಿದೆ. ಸನ್ಮುಕ್ತಾಳಲ್ಲಿ ಈ ಬಗ್ಗೆ ಮಾತಾಡುವ ಸಲಿಗೆಯಿಲ್ಲ ಎಂದಲ್ಲ.. ಜೀವನ ಇನ್ಮುಂದೆ ಹೀಗೆಯೇ ಎಂದು ನಿರ್ಧರಿಸಿಯಾಗಿತ್ತಿರಬೇಕು. ಕಷ್ಟಕಾಲದಲ್ಲಿ ಹೆಂಡತಿಯ ಹಿಂದೆ ನಿಂತವ ಎನ್ನಿಸಿಕೊಳ್ಳುವ ಹಂಬಲವೂ ಇದ್ದಿರಬೇಕು. ಇಷ್ಟೆಲ್ಲ ಎದುರಿಸಿದ್ದೇವೆ ಆದರೂ ಜೀವನ ನಾರ್ಮಲ್ ಆಗಿಯೇ ಇದೆ ಎನ್ನುವ ಗಟ್ಟಿತನವನ್ನು ಇನ್ನಷ್ಟು ಕಲ್ಲಾಗಿಸಬೇಕಿತ್ತಿರಬೇಕು. ದೇಹದ ಅದೊಂದು ಭಾಗವಿಲ್ಲದಿದ್ದರೆ ಏನು ಮಹಾ? ನಿನ್ನೊಟ್ಟಿಗೆ ಚೆಂದವಾಗಿಯೇ ಬಾಳುವೆ, ಅವರಿವರು ಮಾತಿನ ಕಲ್ಲೆಸೆಯಲು ಬಿಡಲಾರೆ ಎಂಬ ಭಾವನೆಯನ್ನು ಸನ್ಮುಕ್ತಾಳಿಗೆ ದಾಟಿಸುವ ಸೋಗು ಗಾಢವಾಗಿತ್ತಿರಬೇಕು.

ಇಷ್ಟು ವರ್ಷದ ಜತೆತನದಲ್ಲಿ ಯಾವತ್ತೂ ಎರಡು ದಿನಕ್ಕಿಂತ ಜಾಸ್ತಿ ಮುಂದುವರೆದ ಭಿನ್ನಾಭಿಪ್ರಾಯಗಳಿರಲಿಲ್ಲ. ಈ ಬಾರಿ ಮಾತ್ರ ಎರಡು ವಾರಕ್ಕೂ ಮಿಕ್ಕಿ ತಿಕ್ಕಾಟ ನಡೆಯುತ್ತಿದೆಯಲ್ಲ. ನಿರಾಶೆ, ಹತಾಶೆ ಮಿಗುವರೆಯಿತು.

ಬಾಲ್ಕನಿಯಿಂದ ಡೈನಿಂಗ್ ಟೇಬಲಿನತ್ತ ಬಂದಾಗ ಸ್ವಿಗ್ಗಿಯಿಂದ ಬಂದ ಬರೀಟೋ ಬೌಲ್ ಮಾತ್ರ ಕಂಡಿತು. ಒಮ್ಮೆ ಅಡುಗೆ ಮನೆಯ ಸಿಂಕಿನ ಬಳಿ ಹೋಗಿ ಸನ್ಮುಕ್ತಾ ಊಟ ಮುಗಿಸಿದ್ದಾಳೆ ಎಂಬುದನ್ನು ಖಾತ್ರಿ ಮಾಡಿಕೊಂಡೆ. ಆರನೇ ಫ಼್ಲೋರಿನ ಗೆಳೆಯನ ಮನೆಗೆ ಹೋಗಿದ್ದ ಮಗ ಧ್ರುವ ಕೂಡಾ ಮನೆಗೆ ವಾಪಸ್ಸಾಗಿ ತನ್ನ ರೂಮಿನ ಕಂಪ್ಯೂಟರ್‌ನಲ್ಲಿ ಮುಳುಗಿದ್ದ. ಎಕ್ಸೆಲ್‌ ಶೀಟಿನ ಚೌಕದಮೇಲೆ ‘ಎಕ್ಸಾಂ – ಹೆಡ್ ಆನ್ ಕೊಲಿಶನ್’ ಎಂಬುದು ದಪ್ಪಕ್ಷರದಲ್ಲಿ ಕಾಣುತ್ತಿತ್ತು.

ಬರೀಟೋ ಬೌಲ್ ಬರಿದು ಮಾಡಿ ಮತ್ತೆ ಬಾಲ್ಕನಿಗೆ ಹೋಗಿ ಕುಕ್ಕರಿಸಿದೆ. ಅಸಂಬದ್ಧ ಯೋಚನೆಗಳು, ಇವಳ ಕ್ಯಾನ್ಸರಿನ ಪತ್ತೆಯಾದಾಗ ಶುರುವಿನ ದಿನಗಳಲ್ಲಿದ್ದಂತೆ. ಸಾಕಾಯಿತಪ್ಪ ಈ ಬಗ್ಗೆಯೇ ಯೋಚಿಸಿ. ನನಗಿಂತ ಜಾಸ್ತಿ ವ್ಯಾಲಿಡೇಶನ್ ಬೇಕಾ ಇವಳಿಗೆ? ನಾನೇ ಇವಳ ಸಪಾಟನ್ನು ಸ್ವೀಕರಿಸಿಯಾಗಿದೆ ಇನ್ನೆಲ್ಲಿಯ ರಗಳೆ ಇವಳದ್ದು ಎಂದು ಛೇಗುಟ್ಟಿದೆ ಶಬ್ದಸಹಿತವಾಗಿ. ತಕ್ಷಣ ನನ್ನ ಮೇಲೇ ನನಗೆ ಹೇವರಿಕೆ ಬಂತು. ಎಂಥ ಕೆಟ್ಟ ವಿಡಂಬನೆಯಪ್ಪಾ ಎಂದು ತಲೆ ಕೊಡವಿದೆ.

ಕುಟುಂಬಕ್ಕೆ ಇಂಬಾದ ಬಾಳಸಂಗಾತಿ ಅನುಭವಿಸಲಿರುವ ಮೆಡಿಕಲ್ ಕಾಂಪ್ಲಿಕೇಷನ್, ತೊಡಕುಗಳೇ ನನ್ನನ್ನು ನಿಜವಾಗಿಯೂ ಕಾಡುತ್ತಿವೆಯಾ ಎಂದು ಮೂಲ ಉದ್ದೇಶವನ್ನೇ ಪ್ರಶ್ನಿಸಿಕೊಂಡೆ. ಪ್ರಶ್ನೆಗಳು ಜಟಿಲವಾಗುತ್ತ ನಡೆದವು.

ಹತ್ತು ವರ್ಷದ ಹಿಂದೆ ನಡೆದ ಘಟನೆಯನ್ನು ಇವತ್ತಿಗೆ ತಳುಕು ಹಾಕುವ ಅಗತ್ಯವಿಲ್ಲ. ಆದರೂ ನೆನಪಿಗೆ ಬರುತ್ತಿದೆ. ದೊಡ್ಡ ಐಟಿ ಕಂಪನಿಯ ಪ್ರಾಜೆಕ್ಟ್ ಮ್ಯಾನೇಜರ್ ಹುದ್ದೆ ನಿರ್ವಹಿಸುತ್ತಿದ್ದ ಕಾಲ. ಆರು ವಾರದ ಸಲುವಾಗಿ ಬರ್ಮಿಂಗ್‌ಹಮ್ ಆಫೀಸಿಗೆ ಹೋಗಿದ್ದೆ, ನವೆಂಬರ್ ತಿಂಗಳಿನಿಂದ ಡಿಸೆಂಬರ್‌ವರೆಗೆ. ವರ್ಷಾಂತ್ಯ ಬಂತೆಂದರೆ ಅಲ್ಲಿನವರಿಗೆ ಮೋಜಿನ ಸಮಯ. ಆಫೀಸಿನಲ್ಲಿ ಸೀಕ್ರೆಟ್ ಸ್ಯಾಂಟಾ ಗಿಫ್ಟ್‌ ಎಕ್ಸ್‌ಚೇಂಜ್ ಸಂಭ್ರಮ ನಡೆದಿತ್ತು. ಆಫೀಸಿನ ಮೂಲೆಯಲ್ಲಿ ಸಿಂಗರಿಸಿಕೊಂಡು ನಿಂತಿದ್ದ ಕ್ರಿಸ್‌ಮಸ್ ಟ್ರೀಯ ಬುಡದಲ್ಲಿ, ಒಂದು ದಿನ ಮುಂಚಿತವಾಗಿ ಎಲ್ಲರೂ ಉಡುಗೊರೆಗಳನ್ನು ತಂದಿಡಬೇಕು. ಕ್ರಿಸ್‌ಮಸ್ ಈವ್ ಆದ ಡಿಸೆಂಬರ್ ಇಪ್ಪತ್ನಾಲ್ಕರಿಂದ ಆಫೀಸಿಗೆ ರಜೆ. ಹಾಗಾಗಿ ಇಪ್ಪತ್ಮೂರರಂದು ಸಂಜೆ ತಮ್ಮ ತಮ್ಮ ಹೆಸರಿದ್ದ ಉಡುಗೊರೆಯನ್ನು ಪ್ರತಿಯೊಬ್ಬರೂ ಪಾಳಿಯ ಪ್ರಕಾರ ತೆರೆದು ತೋರಿಸಬೇಕು. ವಿಚಿತ್ರ ಸ್ಲೋಗನ್ನುಗಳಿದ್ದ ಜಂಪರ್, ಪೈರೆಟ್ ಐಪ್ಯಾಚ್, ಬೆತ್ತಲೆ ಜೋಡಿಯಿದ್ದ ಕರ್ಟನ್ ಹೀಗೆ ಇನ್ನೂ ಕೆಲವು ಉಡುಗೊರೆಗಳನ್ನು ಸಹೋದ್ಯೋಗಿಗಳು ತೆರೆದಾದ ಮೇಲೆ ನನ್ನ ಸರದಿ ಬಂತು. ನನ್ನ ಹೆಸರು ಯಾರಿಗೆ ಬಂದಿತ್ತು ಗೊತ್ತಿಲ್ಲ.. ನಾನು ನಿಧಾನಕ್ಕೆ ಪೊಟ್ಟಣವನ್ನು ಬಿಚ್ಚಿದೆ. ಮೆತ್ತಮೆತ್ತಗಿನ ಅನುಭವವಾದಂತಾಯ್ತು. ಕೊನೆಯ ಪದರವನ್ನೂ ಬಿಡಿಸಿದೆ. ನನ್ನ ಮಧ್ಯಮಗಾತ್ರದ ಕೈಯ್ಯಿಂದ ಹೊರ ತುಳುಕುವಷ್ಟು ದೊಡ್ಡ ಸ್ತನ! ಆರ್ಟಿಫಿಶಿಯಲ್ ಬ್ರೆಸ್ಟ್. ಹೂಬೇಹೂಬ್ ನಿಜವಾದ ಮೊಲೆಯಂತೆಯೇ ಇದೆ. ನನ್ನ ಮುಖವೆಲ್ಲ ಕೆಂಪಡರಿತು.

ಸಹೋದ್ಯೋಗಿಗಳೆಲ್ಲ `ಹೋ’ ಎಂದು ಕಿರುಚಿ ಕಿಚಾಯಿಸಿದರು. ನಾಚಿಕೆಯೋ, ಕಲ್ಚರಲ್ ಆಘಾತವೋ ಕೆಲವು ನಿಮಿಷಗಳಷ್ಟು ಕಾಲ ಮಾತೇ ಆಡಲಿಲ್ಲ ನಾನು. ನನ್ನ ಸೀಕ್ರೆಟ್ ಸ್ಯಾಂಟಾ ಉಡುಗೊರೆಯನ್ನು ಯಾರೂ ನೋಡೇ ಇಲ್ಲವೇನೋ ಎಂಬಂತೆ ಕದ್ದು ಲ್ಯಾಪ್‌ಟಾಪ್ ಬ್ಯಾಗಿನೊಳಗೆ ಸೇರಿಸಿದೆ. ಮೊದಲೇ ನಿಗದಿಯಾದಂತೆ ಮರುದಿನ ಭಾರತಕ್ಕೆ ಹೊರಟುಬಂದೆ. ಮನೆಗೆ ಬಂದ ಮಾರನೆಯ ರಾತ್ರಿ ಧ್ರುವ ಮಲಗಿದ ನಂತರ ಸನ್ಮುಕ್ತಾಳಿಗೆ ಒಮ್ಮೆ ಸ್ಯಾಂಟಾ ಕೊಟ್ಟ ಉಡುಗೊರೆ ತೋರಿಸಿ ಅದನ್ನು ಕವರ್ ಸಮೇತವಾಗಿ ನನ್ನ ವಾರ್ಡ್ರೋಬಿನ ಇನ್ನರ್ ಡ್ರಾದ ಮೂಲೆಯಲ್ಲಿ ತುರುಕಿದೆ. ಸನ್ಮುಕ್ತಾ ಅಂದು ಮನಸೋಇಚ್ಛೆ ನಕ್ಕಿದ್ದಳು.

+++

ಎಷ್ಟು ಹೊತ್ತು ಹೊರಗೆ ಕೂತಿದ್ದೆನೋ. ಪಕ್ಕದ ಲೇಔಟಿನಲ್ಲಿ ಗಾರ್ಡ್ ಎಡೆಬಿಡದೆ ಹೊಡೆಯುತ್ತಿದ್ದ ಸೀಟಿ ನನ್ನನ್ನು ಮತ್ತೆ ಈ ಲೋಕಕ್ಕೆ ಕರೆತಂದಿತು. ಬೆಡ್‌ರೂಮಿಗೆ ಬಂದೆ. ಸನ್ಮುಕ್ತಾ ನಿದ್ದೆ ಮಾಡಿಲ್ಲ ಎಂಬುದು ನನಗೆ ಗೊತ್ತು. ಗಾಢ ನವಿಲು ಬಣ್ಣದ ಕಿಟಕಿಯ ಪರದೆಯ ಕಡೆ ಮುಖ ಮಾಡಿ ಮಲಗಿದವಳ ಮಗ್ಗುಲಿಗೆ ಬಂದು ಕೂತೆ. `ಸನ್ನೀ’ ಎಂದು ನಿಧಾನವಾಗಿ ಕರೆದೆ. ಹಣೆಯ ಮೇಲೆ ಬೆರಳಾಡಿಸಿದೆ. ಇಡೀ ದೇಹವನ್ನು ಜರುಗಿಸಿ ಜಾಗ ಮಾಡಿದವಳೇ ಕಾಲರ್ ಹಿಡಿದು ಜಗ್ಗಿ ನನ್ನನ್ನೂ ತನ್ನ ಪಕ್ಕ ಒರಗಿಸಿಕೊಂಡಳು.

`ಸನ್ನೀ, ನಿನ್ನ ಆಪರೇಶನ್ ಆಗಿ ಹದಿನೆಂಟು ತಿಂಗಳಾಯ್ತು. ಅಷ್ಟೊಂದು ತಿಂಗಳು ಆಸ್ಪತ್ರೆಗೆ ಟೆಸ್ಟ್‌ಗಳಿಗೆ ಹೋಗಿದ್ದು, ಪ್ರತೀ ರಿಪೋರ್ಟ್ ಓದುವ ಮೊದಲೂ ಕೈಕಾಲು ತಣ್ಣಗಾಗಿದ್ದು ಎಲ್ಲವೂ ಮರೆತೆಯಾ? ಈಗಲೂ ತುಂಬ ಸುಂದರಿ ನೀನು. ನನಗೆ ಅಪ್ಸರೆಯೇ. ಧ್ರುವನಿಗಂತೂ ದೇವತೆ ನೀನು. ದ್ಯಾಟ್ಸ್ ವಾಟ್ ಹೀ ಸೇಸ್ ರೈಟ್? ಈ ಎರಡು ವಾರ ನಮ್ಮ ಜೀವನದಲ್ಲಿ ಇರಲೇಯಿಲ್ಲ ಎಂದುಕೊಂಡು ಸುಮ್ಮನಾಗಿಬಿಡೋಣ’

`ಐ ಹ್ಯಾವ್ ಕ್ಲೋಸ್ಡ್ ಆನ್ ಇಟ್. ಸರ್ಜರಿ ಶೆಡ್ಯೂಲ್ ಆಗಿದೆ. ನನ್ನ ಸರ್ಜನ್ನಿನ ನಂಬರನ್ನ ಆಗಲೇ ಶೇರ್ ಮಾಡಿದ್ದೇನೆ. ಒಮ್ಮೆ ನೀನೂ ಮಾತಾಡಿ ನೋಡು’

`ಇಷ್ಟು ಮುಂದುವರೆದ ಮೇಲೆ ಇನ್ನೇನಿದೆ?’ ಅಹಂಅನ್ನು ಹತ್ತಿಕ್ಕುವ ಸರ್ವಪ್ರಯತ್ನ ಜಾರಿಯಲ್ಲಿತ್ತು.

`ಹೊರಗಿನ ಗಾಳಿ ನಿನ್ನ ತಲೆಯನ್ನ ಹಗುರಾಗಿಸಿತು ಎಂದು ಭಾವಿಸಿ ಮಾತಾಡುವ ಎಂದೆ’

`ಯಾಕೆ ಸನ್ನೀ? ಮರೆತೆಯಾ ನಮ್ಮ ಮಾತುಕತೆ.. ಬರೀ ಏರುಗತಿಯೇ ಆದರೆ ನಮ್ಮ ಬೇರನ್ನ ಮರೆಯುತ್ತೇವೆಂದು, ಬೇರಿಗೆ ಹುಳಹಿಡಿದು ಬದುಕಿನ ಮರ ಬೀಳುತ್ತದೆಂದು ಅಲ್ಲಲ್ಲಿ ಪಾಸ್ ತೆಗೆದುಕೊಳ್ಳುತ್ತೇವಲ್ಲ? ಅಲ್ಲ? ನೀನು ತಿಳಿಹೇಳು ನನಗೆ. ಇಷ್ಟೂ ವರ್ಷ ಕಾಲ ಇದೇ ಅಲ್ಲವೇ ನಾವು ಮಾಡಿದ್ದು?’

`ಅಬಾ, ಎಷ್ಟಪ್ಪ ಮಾತು! ಈ ಬಾರಿ ನಿಂಗೆ ತಿಳಿಹೇಳುವ ವಿವೇಕ ನನ್ನಲ್ಲಿಲ್ಲ’ ವಿಷಾದ ತುಂಬಿತು ರೂಮನ್ನ.

ಪ್ರಯತ್ನಪೂರ್ವಕವಾಗಿ ಕೊರಳ ಇಳಿಜಾರ ನೇವರಿಸಹೋದೆ. ಸಟ್ಟನೆ ಕೈ ತಳ್ಳಿದಳು.

`ಇಂಟಾಂಜಿಬಿಲಿಟಿ.. ರಿಮೆಂಬರ್? ಹಾಗೇ ಇರಲಿ ಬಿಡು ಅಮ್ಮೂ.. ಭಾವನೆಗಳ ಬಂಧವೂ ಬೇಡ’

`ಬದುಕನ್ನ ಬಂದಹಾಗೇ ಅಪ್ಪಿಕೊಂಡಾಗಿದೆ ಸನ್ನೀ, ಕಾಣದ ಇನ್ನೊಂದು ತಿರುವು ಬೇಡ’

`ನಾನು ದಿನವೂ ಅರಳಲು ಪ್ರಯತ್ನಿಸಿ ನರಳುತ್ತಿರುವುದು ನಿಂಗೆ ಕಂಡಿಲ್ಲ ಎಂದಾದರೆ ನಿನಗೆ ಕಣ್ಣಿದ್ದೂ ಪ್ರಯೋಜನವೇನು..?’

ಇದನ್ನೂ ಓದಿ: ವಿಸ್ತಾರ ಯುಗಾದಿ ಕಥಾಸ್ಪರ್ಧೆ: ಮೆಚ್ಚುಗೆ ಬಹುಮಾನ ಪಡೆದ ಕಥೆ: ಕಿತ್ತಳೆ ಚಿಟ್ಟೆ

`…’

`ವಾರ್ಡೋಬಿನ ಬಟ್ಟೆಗಳು ನನ್ನನ್ನು ಅಣಕಿಸುತ್ತವೆ ಕಣೋ.. ಬೋರ್ರ್ಡೂಮಿನಲ್ಲಿ ಎಲ್ಲರೆದುರು ಫ್ರೀಜ್ ಆಗಿಬಿಡುತ್ತೀನಿ. ಇದಕ್ಕೆಲ್ಲ ಒಂದು ಫುಲ್‌ಸ್ಟಾಪ್ ಬೇಕಲ್ಲ’

`ಐ ಥಾಟ್ ವಿ ಹ್ಯಾವ್ ಗಾನ್ ಪಾಸ್ಟ್ ಆಲ್ ದೀಸ್. ಗೋ ಫ್ಲ್ಯಾಟ್ ಫೋಟೋಶೂಟ್..?’

`ಸೋ ಕಾಲ್ಡ್ ಇನ್‌ಕ್ಲೂಸಿವ್‌ನೆಸ್ಸಿನ, ಎಜುಕೇಟೆಡ್ ಸೊಸೈಟಿಯ ಡ್ರಾಮಾ ಅಲ್ಲವಾ ಇದೆಲ್ಲ? ಕ್ಲಿವೇಜ್ ತೋರಿಸುವ ಡ್ರೆಸ್ ಹಾಕಿದಾಗಲೆಲ್ಲ ಎಷ್ಟುಬಾರಿ ಕಾಂಪ್ಲಿಮೆಂಟ್ ಕೊಟ್ಟಲ್ಲ ನೀನು!’ ಕಳ್ಳನನ್ನು ಹಿಡಿದಂತೆ ಮಾತಾಡಿದಳು.

ಥತ್! ನನ್ನನ್ನ ಡೈಲೆಮಾದಲ್ಲಿ ಹಾಕುತ್ತಿದ್ದಾಳಲ್ಲ ಮತ್ತೆ ಎನ್ನಿಸಿತು. ಮಾತುಗಳು ಇನ್ನಷ್ಟು ರಾಡಿ ಮಾಡುವ ಮೊದಲು ಬ್ರಶ್ ಮಾಡುವ ನೆಪಮಾಡಿ ಬಾತ್ರೂಮಿಗೆ ನಡೆದೆ. ಹಲ್ಲುಕಿರಿದಂತಾಗಿದ್ದ ಬ್ರಶ್ಶನ್ನು ಮೂಲೆಗೆ ರಪ್ಪನೆ ಎಸೆದೆ.

ಬೆಳಗ್ಗೆ ಐದಕ್ಕೇ ಎದ್ದು ಊರಿಗೆ ಹೋಗಿ ಬರುವ ನಿರ್ಧಾರ ಮಾಡಿದೆ. ಐದು ಗಂಟೆಗಳ ನಾನ್‌ಸ್ಟಾಪ್ ಡ್ರೈವ್. ಎರಡು ದಿನಗಳ ಓಓಓ’ ಸೆಟ್‌ಅಪ್ ಮಾಡಿ, ಆಫೀಸಿಗೆ ಬರಲಾಗುವುದಿಲ್ಲ ಎಂದು ಇಮೇಲ್ ಬರೆದುಸೆಂಡ್ ಆಲ್’ ಬಟನ್ನೊತ್ತಿದೆ. ಬೆಕ್ಕಿನ ಹೆಜ್ಜೆಯಿಟ್ಟು ರೂಮಿನೊಳಗೆ ಹೋಗಿ ವಾರ್ಡೋಬಿನ ಇನ್ನರ್ ಡ್ರಾ ತೆಗೆದು ಹತ್ತುವರ್ಷದಿಂದ ಮುಟ್ಟದೇ ಇದ್ದ ಸಿಕ್ರೇಟ್ ಸ್ಯಾಂಟಾ ಗಿಫ಼್ಟನ್ನು ಎತ್ತಿಟ್ಟುಕೊಂಡೆ.

`ಸನ್ನೀ, ಅಮ್ಮನನ್ನು ನೋಡಿಬರುವೆ’ ಎಂದು ವಾಟ್ಸ್ಯಾಪ್ ಮೆಸೇಜಿಸಿ ಕಾರು ಹತ್ತಿದೆ.

ದಣಪೆ ದಾಟಿ ಅಂಗಳಕ್ಕೆ ಬಂದಾಗ ಅಮ್ಮ ಕೊಟ್ಟಿಗೆಯಲ್ಲಿದ್ದಳು. `ಅರೇ.. ಯಾರು ಬಂದರು ನೋಡು ಗಿರಿಜೆ’ ಎನ್ನುತ್ತ ಅಂಗಳಕ್ಕೆ ಬಂದಳು ಅಮ್ಮ. ಆಗಲೇ ಹೊಳೆದಿದ್ದು ಊರಿಗೆ ಬಂದು ಆರು ತಿಂಗಳಾಗಿದೆ ಎಂದು. ಅರವತ್ತು ಸೀಮೆಯಲ್ಲಿರಸಿದ ನೆಮ್ಮದಿ ಅವಿತಿದ್ದು ಮಾತ್ರ ಅಮ್ಮನ ಮಡಿಲಲ್ಲಿ ಅನ್ನುವುದು ಮನಸ್ಸಿಗೆ ಬಂದು ತುಟಿಗಳು ಅಗಲವಾದವು. ಒಳ್ಳೆಯ ಎತ್ತರದ ಅಮ್ಮ ಕೆಂಪು ಸೀರೆ, ಕಪ್ಪು ಪೋಲಕದಲ್ಲಿ ಎಂದಿಗಿಂತ ಚೆಂದ ಕಂಡಳು.

ಇದನ್ನೂ ಓದಿ: ವಿಸ್ತಾರ ಯುಗಾದಿ ಕಥಾಸ್ಪರ್ಧೆ: ಮೆಚ್ಚುಗೆ ಬಹುಮಾನ ಪಡೆದ ಕಥೆ: ಹುಣಸೇಹೂವು‌

ನಾ ಕಂಡಷ್ಟು ದಿನವೂ ಅಮ್ಮನ ಮೇಲೆ ಕೆಸಕ್ಕನೆ ಹಚಗುಟ್ಟುತ್ತಿದ್ದ ಅಪ್ಪ ಅರವತ್ತಕ್ಕೆ ತೀರಿಕೊಂಡಿದ್ದ. ಬರೀ ಒಳ್ಳೆಯತನ ಮಾತ್ರ ಮನುಷ್ಯನಲ್ಲಿರಲು ಸಾಧ್ಯವೇ ಎಂದುಕೊಂಡು ಅಮ್ಮ ಎಲ್ಲವನ್ನೂ ಹೊಟ್ಟೆಯಲ್ಲಿ ಹಾಕಿಕೊಂಡಂತಿದ್ದಳು. ಪರಿಸ್ಥಿತಿ ಯಾವುದೇ ಇರಲಿ, ಜೊತೆಯಿರುವ ಜೀವಗಳ ಅನುತನು ನೋಡುವುದು ಹೇಗೆಂದು ಅಮ್ಮ ಮಾತನಾಡದೇ ಕಲಿಸಿಕೊಟ್ಟಿದ್ದಳು. ಅಪ್ಪ ಹೋದ ಮೇಲೆ ಕೊಟ್ಟಿಗೆ, ಮನೆ ಸುತ್ತಲ ಜಮೀನು, ಕಾರ್ಯಕಟ್ಟಲೆ, ಆಗೀಗ ವೀಡಿಯೋ ಕಾಲ್‌ಗಳು ಎಂದುಕೊಂಡು ಆರಾಮವಾಗಿದ್ದಳು. ಮೊದಲು ಕಳೆದ ಕಷ್ಟದ ದಿನಗಳ ಕನಸು ಬಿದ್ದು ನಿದ್ದೆ ಕೆಡಿಸದಿರಲಿ ಎಂದು ದಿನವೂ ಅರ್ಧ ನಿದ್ದೆಗುಳಿಗೆ ನುಂಗುವುದನ್ನು ಮಾತ್ರ ಮರೆಯುತ್ತಿರಲಿಲ್ಲ. ವರ್ಷಕ್ಕೊಮ್ಮೆ ವಾರದ ಮಟ್ಟಿಗೆ ನಮ್ಮೊಟ್ಟಿಗೆ ಬಂದಿದ್ದು ಮೊಮ್ಮಗನಿಗೆ ಅಚ್ಚೆ ಮಾಡುತ್ತಿದ್ದಳು. ಅದರಾಚೆಗೆ ಅವಳೂ ಏನೂ ನಿರೀಕ್ಷಿಸುತ್ತಿರಲಿಲ್ಲ, ನಾವೂ ಅವಳನ್ನು ಪರೀಕ್ಷೆಗೊಡ್ಡುತ್ತಿರಲಿಲ್ಲ.

ಅಮ್ಮನ ಅಕರಾಸ್ಥೆಯ ಜಮೀನಿನಲ್ಲಿ ತಿರುಗಾಡಿದೆ. ತಿಳಿಸಾರನ್ನು ಲೋಟದಲ್ಲಿ ಸೊರಸೊರ ಶಬ್ದಮಾಡಿ ಕುಡಿದೆ. ಗಾಡ್ರೆಜ್ ಬೀರುವಿನ ಬಾಗಿಲು ತೆಗೆದು ಅಮ್ಮ ಜೋಡಿಸಿಟ್ಟ ಸೀರೆಗಳ ಮೇಲೆ ಪ್ರೀತಿಯಿಂದ ಕೈಯ್ಯಾಡಿಸಿದೆ. ಹಿತ್ತಲ ಬಾಗಿಲಲ್ಲಿದ್ದ ಕೈತೊಳೆವ ಸಿಂಕಿನ ಮೇಲ್ಭಾಗದ ಕನ್ನಡಿ ಪಳಪಳ ಹೊಳೆಯುತ್ತಿರುವುದ ನೋಡಿ ಬೆರಗಾದೆ. ಮೊದಲು ಯಾವತ್ತೂ ಈ ಕನ್ನಡಿಯ ಹೊಳಪು ನನ್ನ ಕಣ್ಣಿಗೆ ಬಿದ್ದದ್ದಕ್ಕೆ ಬೇಸರಪಟ್ಟೆ.

ನಾಳೆ ಬೆಳಗ್ಗೆ ಒತ್ತು ಶ್ಯಾವಿಗೆ ಮಾಡಲಾ ಎಂದು ಕೇಳಿದ ಅಮ್ಮ ನನ್ನ ಉತ್ತರವನ್ನು ಮೊದಲೇ ಊಹಿಸಿದವಳಂತೆ ಎದ್ದು ದೇವರಮನೆಯ ಪಕ್ಕದ ಪಡಸಾಲೆಯಲ್ಲಿ ಮಲಗಿದಳು. ಜಗಲಿಯಲ್ಲಿ ಟೀವಿ ಚಾನೆಲ್ ಬದಲಾಯಿಸುತ್ತ ಬಿದ್ದುಕೊಂಡೇ ಇದ್ದ ನಾನು ಏನೋ ನಿರ್ಧರಿಸಿದಂತೆ ಎದ್ದೆ. ಗಡಿಯಾರ ಹನ್ನೊಂದೂವರೆ ತೋರಿಸುತ್ತಿತ್ತು. ಬ್ಯಾಗಿನಲ್ಲಿದ್ದ ಸೀಕ್ರೆಟ್ ಸ್ಯಾಂಟಾ ಗಿಫ್ಟನ್ನು ಕವರಿನ ಸಮೇತ ತೆಗೆದು ಕೊಟ್ಟಿಗೆಯ ಪಕ್ಕ ಬಂದೆ. ಕೈಗೆ ಸಿಕ್ಕ ಕೋಲಿನ ಸಹಾಯದಿಂದ ಮಣ್ಣು ಕಲ್ಲು ಏನನ್ನೂ ಲೆಕ್ಕಿಸದೇ ಸಣ್ಣದೊಂದು ಗುದ್ದ ತೋಡಿ ಗಿಫ್ಟನ್ನು ಅದರೊಳಗಿಟ್ಟೆ. ಮೈ ಇದ್ದಕ್ಕಿದ್ದಂತೆ ಹಗುರಾದಂತಾಯಿತು. ಒನ್ನಮೂನೆ ಸ್ಖಲನದ ಸುಖ!

ಮತ್ತೆ ಜಗಲಿಗೆ ಬಂದು ಹಾಸಿಗೆಯ ಪಕ್ಕದಲ್ಲಿದ್ದ ಮೊಬೈಲನ್ನು ಎತ್ತಿಕೊಂಡು ಸನ್ಮುಕ್ತಾಳ ಸರ್ಜನ್ನರ ನಂಬರನ್ನು ಸೇವ್ ಮಾಡಿಕೊಂಡೆ. ಮೆಸೇಜ್ ಟೈಪ್ ಮಾಡತೊಡಗಿದೆ… `ಡಾಕ್, ದಿಸ್ ಇಸ್ ಸನ್ಮುಕ್ತಾಸ್ ಹಸ್ಬಂಡ್. ಐ ವಿಲ್ ಬೀ ಇನ್‌ಫ಼್ರಂಟ್ ಆಫ್ ದ ಥಿಯೇಟರ್ ಡ್ಯೂರಿಂಗ್ ದ ಸರ್ಜರಿ ಟುಮೊರೋ’

ಇದನ್ನೂ ಓದಿ: ವಿಸ್ತಾರ ಯುಗಾದಿ ಕಥಾಸ್ಪರ್ಧೆ: ಮೆಚ್ಚುಗೆ ಬಹುಮಾನ ಪಡೆದ ಕಥೆ: ನೆಲೆ

ಕ್ಷಣ ಕ್ಷಣದ ಮಾಹಿತಿಗಾಗಿ Vistara News FaceBook ಪೇಜ್ ಫಾಲೋ ಮಾಡಿ
ಮಹತ್ವದ ಮಾಹಿತಿಗಾಗಿ ವಿಸ್ತಾರ ನ್ಯೂಸ್ ಆ್ಯಪ್ ಉಚಿತವಾಗಿ ಡೌನ್ ಲೋಡ್ ಮಾಡಿಕೊಳ್ಳಿ: Andriod App | IOS App
Continue Reading
Click to comment

Leave a Reply

Your email address will not be published. Required fields are marked *

ದಕ್ಷಿಣ ಕನ್ನಡ

Yakshagana Artist: ವೇಷ ಕಳಚುತ್ತಿರುವಾಗಲೇ ಹೃದಯ ಸ್ತಬ್ಧ ; ಯಕ್ಷಗಾನ ಕಲಾವಿದ ಗಂಗಾಧರ ಪುತ್ತೂರು ಇನ್ನಿಲ್ಲ

Gangadhar Puttur : ವೇಷ ಕಳಚುತ್ತಿರುವಾಗಲೇ ಯಕ್ಷಗಾನ ಕಲಾವಿದ (Yakshagana Artist) ಗಂಗಾಧರ ಪುತ್ತೂರು ಇಹಲೋಕ ತ್ಯಜಿಸಿದ್ದಾರೆ. ಮುಖದ ಬಣ್ಣವನ್ನು ಅಳಿಸುತ್ತಿರುವಾಗ ಹೃದಯಾಘಾತದಿಂದ ಕುಸಿದು ಬಿದ್ದಿದ್ದಾರೆ. ಕೂಡಲೇ ಅವರನ್ನು ಆಸ್ಪತ್ರೆಗೆ ಸಾಗಿಸಲಾಯಿತಾದರೂ ಚಿಕಿತ್ಸೆ ಫಲಿಸದೆ ಮೃತಪಟ್ಟಿದ್ದಾರೆ.

VISTARANEWS.COM


on

By

Yakshagana Artist No more
Koo

ಮಂಗಳೂರು: ವೇಷ ಕಳಚುತ್ತಿರುವಾಗಲೇ ಹೃದಯಾಘಾತದಿಂದ (Heart attack) ಧರ್ಮಸ್ಥಳ ಯಕ್ಷಗಾನ ಮೇಳದ ಸವ್ಯಸಾಚಿ ಕಲಾವಿದ (Yakshagana Artist) ಗಂಗಾಧರ ಪುತ್ತೂರು(60) ಅವರು ಇಹಲೋಕ ತ್ಯಜಿಸಿದ್ದಾರೆ.

ನಿನ್ನೆ ಬುಧವಾರ (ಮೇ 1) ರಾತ್ರಿ ಕೋಟ ಗಾಂಧಿಮೈದಾನದ ಬಳಿ ಶ್ರೀ ಧರ್ಮಸ್ಥಳ ಕ್ಷೇತ್ರ ಮಹಾತ್ಮೆ ಯಕ್ಷಗಾನದಲ್ಲಿ ಅವರು ಕುಕ್ಕಿಂತ್ತಾಯ ದೈವದ ವೇಷವನ್ನು ನಿರ್ವಹಿಸಿದ್ದರು. ಬಳಿಕ ಚೌಕಿಗೆ ಆಗಮಿಸಿ ಕಿರೀಟ, ಯಕ್ಷಗಾನದ ಆಭರಣ ತೆಗೆದಿಟ್ಟು, ಮುಖದ ಬಣ್ಣವನ್ನು ಅಳಿಸುತ್ತಿರುವಾಗ ತೀವ್ರ ಹೃದಯಾಘಾತದಿಂದ ಮೃತಪಟ್ಟಿದ್ದಾರೆ.

ಪುತ್ತೂರಿನ ಸೇಡಿಯಾಪು ನಿವಾಸಿಯಾಗಿರುವ ಇವರು ಏಳನೇ ತರಗತಿಯವರೆಗೆ ವಿದ್ಯಾಭ್ಯಾಸ ಹೊಂದಿದ್ದರು. ತಮ್ಮ 18ನೇ ವಯಸ್ಸಿಗೆ ಯಕ್ಷಗಾನ ತಿರುಗಾಟ ಆರಂಭಿಸಿದ ಗಂಗಾಧರ ಪುತ್ತೂರು ಸುದೀರ್ಘ 40 ವರ್ಷಗಳಷ್ಟು ಕಾಲ ಯಕ್ಷಗಾನ ರಂಗದಲ್ಲಿ ವ್ಯವಸಾಯ ಮಾಡಿದ್ದರು. ಕರ್ಗಲ್ಲು ವಿಶ್ವೇಶ್ವರ ಭಟ್ ಹಾಗೂ ಕೆ.ಗೋವಿಂದ ಭಟ್ ಅವರಿಂದ ನಾಟ್ಯಾಭ್ಯಾಸ ಮಾಡಿದರು.

ಯಕ್ಷಗಾನ ರಂಗದ ಸವ್ಯಸಾಚಿ ಕಲಾವಿದರಾದ ಇವರು ಸ್ತ್ರೀವೇಷದಿಂದ ಹಿಡಿದು ಪುಂಡುವೇಷ, ರಾಜವೇಷ, ಹೆಣ್ಣುಬಣ್ಣ ಸಮರ್ಥವಾಗಿ ನಿರ್ವಹಿಸುತ್ತಿದ್ದರು. 30 ವರ್ಷಗಳಿಗಿಂತಲೂ ಅಧಿಕ ಕಾಲದಿಂದ ಗಂಗಾಧರ ಪುತ್ತೂರು ಧರ್ಮಸ್ಥಳ ಮೇಳದಲ್ಲಿಯೇ ಕಲಾವಿದರಾಗಿ ತಿರುಗಾಟ ಮಾಡಿದ್ದರು.

ಇದನ್ನೂ ಓದಿ: Prajwal Revanna case: ತಲೆಮರೆಸಿಕೊಂಡ ಪ್ರಜ್ವಲ್‌ ರೇವಣ್ಣಗೆ ಲುಕೌಟ್‌ ನೋಟಿಸ್‌ ಜಾರಿ, ಬಂದ ಕೂಡಲೇ ಬಂಧನ!

ತೀವ್ರ ಹೃದಯಾಘಾತದಿಂದ ಹಿರಿಯ ಸಂಸದ ಶ್ರೀನಿವಾಸ್‌ ಪ್ರಸಾದ್‌ ವಿಧಿವಶ

ಬೆಂಗಳೂರು: ಚಾಮರಾಜನಗರ ಸಂಸದ ಶ್ರೀನಿವಾಸ್ ಪ್ರಸಾದ್ (76) (Srinivas Prasad) ಅವರು ತೀವ್ರ ಹೃದಯಾಘಾತದಿಂದ (Heart Aattack) ವಿಧಿವಶರಾದರು. ತೀವ್ರ ಅನಾರೋಗ್ಯದಿಂದ ಬಳಲುತ್ತಿದ್ದ ಅವರನ್ನು ಕೆಲದಿನಗಳ ಹಿಂದೆ ಓಲ್ಡ್ ಏರ್ಪೋರ್ಟ್ ರಸ್ತೆಯ ಮಣಿಪಾಲ್ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಆದರೆ ಚಿಕಿತ್ಸೆ ಫಲಕಾರಿಯಾಗದೇ ತಡರಾತ್ರಿ 1:20ಕ್ಕೆ (Manipal Hospital ) ಅವರು ನಿಧನರಾಗಿದ್ದರು. ವಯೋಸಹಜ ಕಾಯಿಲೆಯಿಂದ ಬಳಲುತ್ತಿದ್ದ ಶ್ರೀನಿವಾಸ್ ಪ್ರಸಾದ್ ಅವರು ಏಪ್ರಿಲ್ 22ರಂದು ಮಣಿಪಾಲ್ ಆಸ್ಪತ್ರೆಗೆ ದಾಖಲಾಗಿದ್ದರು. ಮೂತ್ರಕೋಶ ಸಂಬಂಧಿ ಸಮಸ್ಯೆಯಿಂದ ಬಳಲುತ್ತಿದ್ದ ಅವರಿಗೆ ತುರ್ತು ನಿಗಾ ಘಟಕದಲ್ಲಿ ಚಿಕಿತ್ಸೆ ನೀಡಲಾಗುತ್ತಿತ್ತು ಎನ್ನಲಾಗಿದೆ.

ಇನ್ನು ಈ ಬಗ್ಗೆ ಶ್ರೀನಿವಾಸ್ ಪ್ರಸಾದ್ ಅಳಿಯ ಹರ್ಷವರ್ಧನ್ ಮಾಹಿತಿ ನೀಡಿದ್ದು, ಶ್ರೀನಿವಾಸ್ ಪ್ರಸಾದ್ ಅವರು ರಾತ್ರಿ 1:20ರ ಸುಮಾರಿಗೆ ತೀವ್ರವಾದ ಹೃದಯಾಘಾತದಿಂದ ನಿಧನರಾಗಿದ್ದಾರೆ. ಅವರನ್ನು ಉಳಿಸಿಕೊಳ್ಳಲು ವೈದ್ಯರು ಸಾಕಷ್ಟು ರೀತಿಯಲ್ಲಿ ಪ್ರಯತ್ನ ಮಾಡಿದ್ದರು. ಅವರ ಈ ಅಗಲಿಕೆ ಇಡೀ ದಲಿತ ಸಮುದಾಯಕ್ಕೆ ತುಂಬಲಾರದ ನಷ್ಟ. ನನಗೆ ರಾಜಕೀಯಕ್ಕೆ ಜನ್ಮ ಕೊಟ್ಟಂತವರು. ರಾಜಕೀಯದಲ್ಲಿ ಏಕಾಂಗಿಯಾಗಿ ಹೋರಾಟ ಮಾಡೋದಕ್ಕೆ ಬಿಟ್ಟು ಹೋಗಿದ್ದಾರೆ. ಕೊನೆಯ ಉಸಿರು ಇರುವವರೆಗೂ ಹೋರಾಟ ಮಾಡಿದ್ದಾರೆ, ಹೋರಾಟದ ಜೀವಿ ಅವರು. ಐದು ವರ್ಷದ ಹಿಂದೆ ನಾನು ನಂಜನಗೂಡಿನಲ್ಲಿ ಗೆದ್ದಾಗ ಅವರು ಲೋಕಸಭೆಯಲ್ಲಿ ಸ್ಪರ್ಧೆ ಮಾಡ್ತಿನಿ ಅಂದರು. ನನ್ನನ್ನು ಅವರು ತಂದೆ ಸ್ಥಾನದಲ್ಲಿ ನಿಂತು ರಾಜಕೀಯವಾಗಿ ಬೆಳೆಸಿದ್ದಾರೆ ಯಾವುದೆ ವಿಚಾರ ಆಗಿದ್ದರೂ ಅವರ ಜೊತೆ ಚರ್ಚೆ ಮಾಡಿಯೇ ನಿರ್ಧಾರಕ್ಕೆ ಬರುತ್ತಿದೆ. ಈಗ ಯಾರ ಬಳಿ ಹೋಗಿ ಕೇಳಲಿ ಎಂದು ಅನಿಸಿ ಬಿಟ್ಟಿದೆ ಎಂದು ಭಾವುಕರಾಗಿ ಮಾತನಾಡಿದರು.

ಇದನ್ನೂ ಓದಿ:Raja Marga Column :‌ ಕಣ್ಣೇ ಕಾಣದ ಆಕೆ ಎರಡು ಬಾರಿ ಐಎಎಸ್‌ ಪಾಸ್‌ ಮಾಡಿದ್ದರು!

ಚಾಮರಾಜನಗರ ಕ್ಷೇತ್ರದಿಂದ 7 ಬಾರಿ ಸಂಸದರಾಗಿ ಆಯ್ಕೆಯಾಗಿದ್ದ ಶ್ರೀನಿವಾಸ್‌ ಪ್ರಸಾದ್‌ 1999ರಲ್ಲಿ ಅಟಲ್ ಬಿಹಾರಿ ವಾಜಪೇಯಿ ನೇತೃತ್ವದ ಕೇಂದ್ರ ಸರ್ಕಾರದಲ್ಲಿ ಆಹಾರ ಮತ್ತು ಗ್ರಾಹಕ ವ್ಯವಹಾರಗಳ ಸಚಿವರಾಗಿ ಕಾರ್ಯನಿರ್ವಹಿಸಿದ್ದರು. ಇನ್ನು 2013ರಿಂದ 2016ರವರೆಗೆ ಸಿದ್ದರಾಮಯ್ಯ ನೇತೃತ್ವದ ರಾಜ್ಯ ಸರ್ಕಾರದಲ್ಲಿ ಕಂದಾಯ ಮತ್ತು ಮುಜರಾಯಿ ಸಚಿವರಾಗಿದ್ದರು . 24 ಡಿಸೆಂಬರ್ 2016 ರಂದು ಅಧಿಕೃತವಾಗಿ ಬಿಜೆಪಿ ಸೇರ್ಪಡೆಯಾಗಿದ್ದ ಅವರು 2019ರಲ್ಲಿ ಚಾಮರಾಜನಗರ ಸಂಸದರಾಗಿ ಆಯ್ಕೆ.ಯಾಗಿದ್ದರು. ಅನಾರೋಗ್ಯ ಸಮಸ್ಯೆಯಿಂದಾಗಿ ರಾಜಕೀಯದಿಂದ ದೂರ ಉಳಿಯಲು ನಿರ್ಧರಿಸಿದ ಅವರು 2024 ಮಾರ್ಚ್ 17ರಂದು ರಾಜಕೀಯ ನಿವೃತ್ತಿ ಪಡೆದುಕೊಂಡಿದ್ದರು.

ಈ ಸಂಗತಿಯ ಕುರಿತು ನಿಮ್ಮ ಅನಿಸಿಕೆ ಏನು? ಕಾಮೆಂಟ್ ಮೂಲಕ ತಿಳಿಸಿ

Continue Reading

ಬೆಂಗಳೂರು

Kaladarpana-Art Reflects: ಬೆಂಗಳೂರಿನಲ್ಲಿ ಮೇ 5ರಂದು ಪ್ರತಿಭಾ ವೇದಿಕೆ ಸೀಜನ್‌-4 ಪ್ರಶಸ್ತಿ ಪ್ರದಾನ, ರಾಜ್ಯ ಮಟ್ಟದ ಚಿತ್ರಕಲಾ ಸ್ಪರ್ಧೆ

Kaladarpana-Art Reflects: ಬೆಂಗಳೂರು ವಿಶ್ವವಿದ್ಯಾಲಯದ ಕಲಾಗ್ರಾಮ ಸಭಾಂಗಣದಲ್ಲಿ ಮೇ 5ರಂದು ಪ್ರತಿಭಾ ವೇದಿಕೆ ಸೀಜನ್‌-4 ಪ್ರಶಸ್ತಿ ಪ್ರದಾನ ಸಮಾರಂಭ ಹಾಗೂ ರಾಜ್ಯ ಮಟ್ಟದ ಚಿತ್ರಕಲಾ ಸ್ಪರ್ಧೆ ನಡೆಯಲಿದೆ.

VISTARANEWS.COM


on

Kaladarpana-Art Reflects
Koo

ಬೆಂಗಳೂರು: ಕಲಾ ದರ್ಪಣ- ಆರ್ಟ್‌ ರಿಫ್ಲೆಕ್ಟ್ಸ್‌ (Kaladarpana-Art Reflects) ವತಿಯಿಂದ ಮೇ 5ರಂದು ಪ್ರತಿಭಾ ವೇದಿಕೆ ಸೀಜನ್‌-4 ಪ್ರಶಸ್ತಿ ಪ್ರದಾನ ಸಮಾರಂಭ ಹಾಗೂ ರಾಜ್ಯ ಮಟ್ಟದ ಚಿತ್ರಕಲಾ ಸ್ಪರ್ಧೆಯನ್ನು ನಗರದ ನಾಗರಬಾವಿ 2ನೇ ಹಂತದ ಎನ್‌ಜಿಇಎಫ್‌ ಲೇಔಟ್‌ನ ಬೆಂಗಳೂರು ವಿಶ್ವವಿದ್ಯಾಲಯದ ಕಲಾಗ್ರಾಮ ಸಭಾಂಗಣದಲ್ಲಿ ಆಯೋಜಿಸಲಾಗಿದೆ.

ಭಾನುವಾರ (ಮೇ 5ರಂದು) ಬೆಳಗ್ಗೆ 8.30ಕ್ಕೆ ರಾಜ್ಯ ಮಟ್ಟದ ಚಿತ್ರಕಲಾ ಸ್ಪರ್ಧೆ ನಡೆಯಲಿದ್ದು, 9ಗಂಟೆಗೆ ಸಾಂಸ್ಕೃತಿಕ ಕಾರ್ಯಕ್ರಮ ಹಾಗೂ 11 ಗಂಟೆಗೆ ಸಭಾ ಕಾರ್ಯಕ್ರಮ ನಡೆಯಲಿದೆ.

ಅಂತರಾಷ್ಟ್ರೀಯ ಖ್ಯಾತಿಯ ತಬಲ ವಾದಕ ಪಂಡಿತ್ ಡಾ. ಸತೀಶ್ ಹಂಪಿಹೊಳಿ ಅವರು ಕಾರ್ಯಕ್ರಮ ಉದ್ಘಾಟಿಸಲಿದ್ದು, ಪ್ರಜಾವಾಣಿ ಪತ್ರಿಕೆ ಕಾರ್ಯನಿರ್ವಾಹಕ ಸಂಪಾದಕ ರವೀಂದ್ರ ಭಟ್ಟ ಅವರು ಅಧ್ಯಕ್ಷತೆ ವಹಿಸಲಿದ್ದಾರೆ. ಮುಖ್ಯ ಅತಿಥಿಗಳಾಗಿ ಸಮಾಜ ಸೇವಕ ಮತ್ತು ಮಾರುತಿ ಮೆಡಿಕಲ್ಸ್ ಮಾಲೀಕರು ಮಹೇಂದ್ರ ಮುಣೋತ್ ಜೈನ್ ಅವರು ಭಾಗವಹಿಸಲಿದ್ದಾರೆ. ಈ ಮೂವರು ಗಣ್ಯರು, ಸಾಧಕರಿಗೆ ಪ್ರಶಸ್ತಿ ಪ್ರದಾನ ಮಾಡಲಿದ್ದಾರೆ.

ಕಲಾದರ್ಪಣ ಪ್ರಶಸ್ತಿ ಪುರಸ್ಕೃತರು

  • ಗೋ.ನಾ. ಸ್ವಾಮಿ, ಅಂತಾರಾಷ್ಟ್ರೀಯ ಖ್ಯಾತಿಯ ಜನಪದ ಗಾಯಕರು
  • ವಿದುಷಿ ಅನಸೂಯ ದ್ವಾರಕನಾಥ, ಖ್ಯಾತ ಕರ್ನಾಟಕ ಶಾಸ್ತ್ರೀಯ ಸಂಗೀತಗಾರರು

ಇದನ್ನೂ ಓದಿ | Film festival: ಬೆಂಗಳೂರಿನಲ್ಲಿ ಮೇ 4, 5ರಂದು ಗುರುದತ್‌ ಚಲನ ಚಿತ್ರೋತ್ಸವ ಮತ್ತು ಸಂಗೀತ ರಸ ಸಂಜೆ

ಕಾರ್ಯಕ್ರಮಕ್ಕೆ ವಿಶೇಷ ಅತಿಥಿಗಳಾಗಿ ಕರ್ನಾಟಕ ಚಿತ್ರಕಲಾ ಪರಿಷತ್‌ನ ಪ್ರಾಧ್ಯಾಪಕ ಪ್ರೊ. ವಿ.ಎಸ್. ನಾಯಕ ಬಳಕೂರು, ಎಸ್.ಎಸ್.ವಿ.ಎಸ್.ಪಿ.ಎಸ್. ಶಾಲೆ ಪ್ರಾಂಶುಪಾಲೆ ಲತಾ ಎಸ್. ಅವರು ಆಗಮಿಸಲಿದ್ದಾರೆ. ಕಲಾ ದರ್ಪಣ- ಆರ್ಟ್‌ ರಿಫ್ಲೆಕ್ಟ್ಸ್‌ ಸಂಸ್ಥೆಯ ಹೇಮಾ ವಿನಾಯಕ್‌ ಪಾಟೀಲ್‌ ಹಾಗೂ ವಿನಾಯಕ್‌ ಪಾಟೀಲ್‌ ಅವರು ಉಪಸ್ಥಿತರಿರಲಿದ್ದಾರೆ. ಖ್ಯಾತ ನಿರೂಪಕಿ ಭವಾನಿ ಲೋಕೇಶ್‌ ಅವರು ಕಾರ್ಯಕ್ರಮ ನಡೆಸಿಕೊಡಲಿದ್ದಾರೆ.

Continue Reading

ಅಂಕಣ

ರಾಜಮಾರ್ಗ ಅಂಕಣ: ವಾಲ್ಮೀಕಿ ರಾಮಾಯಣ vs ಹನುಮಾನ್ ರಾಮಾಯಣ

ರಾಜಮಾರ್ಗ ಅಂಕಣ: ನಾವು ಮಾಡುವ ಎಲ್ಲಾ ಕೆಲಸಗಳ ಹಿಂದೆ ಒಂದಲ್ಲಾ ಒಂದು ಸ್ವಾರ್ಥ ಇರುತ್ತದೆ. ಕೆಲವರಿಗೆ ದುಡ್ಡಿನ ದಾಹ. ಕೆಲವರಿಗೆ ಕೀರ್ತಿಯ ಮೋಹ. ಇನ್ನೂ ಕೆಲವರಿಗೆ ಅಧಿಕಾರದ ಆಸೆ. ಇನ್ನೂ ಕೆಲವರಿಗೆ ಜನಪ್ರಿಯತೆಯ ಲೋಲುಪತೆ. ಅವುಗಳನ್ನು ಬಿಟ್ಟರೆ ನಾವೂ ಹನುಮಂತನ ಎತ್ತರಕ್ಕೆ ಏರಬಹುದು.

VISTARANEWS.COM


on

Koo

ಈ ಕಥೆಯಲ್ಲಿ ಅದ್ಭುತ ಸಂದೇಶ ಇದೆ

Rajendra-Bhat-Raja-Marga-Main-logo

ರಾಜಮಾರ್ಗ ಅಂಕಣ: ಈ ಕಥೆಗೆ ಮೂಲ ಯಾವುದು ಎಂದು ಕೇಳಬೇಡಿ. ಆದರೆ ಅದರಲ್ಲಿ ಅದ್ಭುತ ಸಂದೇಶ ಇರುವ ಕಾರಣ ಅದನ್ನು ಇಲ್ಲಿ ಬರೆಯುತ್ತಿದ್ದೇನೆ. ಇದು ಯಾವುದೋ ಒಂದು ವ್ಯಾಟ್ಸಪ್ ಗುಂಪಿನಲ್ಲಿ ಬಂದ ಲೇಖನ ಆಗಿದೆ.

ಹನುಮಂತನೂ ಒಂದು ರಾಮಾಯಣ ಬರೆದಿದ್ದ!

ವಾಲ್ಮೀಕಿ ರಾಮಾಯಣ ಬರೆದು ಮುಗಿಸಿದಾಗ ಅದನ್ನು ಓದಿದ ನಾರದನಿಗೆ ಅದು ಖುಷಿ ಕೊಡಲಿಲ್ಲ. ಆತ ಹೇಳಿದ್ದೇನೆಂದರೆ – ಇದು ಚೆನ್ನಾಗಿದೆ. ಆದರೆ ಹನುಮಂತ ಒಂದು ರಾಮಾಯಣ ಬರೆದಿದ್ದಾನೆ. ಅದಿನ್ನೂ ಚೆನ್ನಾಗಿದೆ!

ಈ ಮಾತು ಕೇಳದೆ ವಾಲ್ಮೀಕಿಗೆ ಸಮಾಧಾನ ಆಗಲಿಲ್ಲ. ಆತನು ತಕ್ಷಣ ನಾರದನನ್ನು ಕರೆದುಕೊಂಡು ಹನುಮಂತನನ್ನು ಹುಡುಕಿಕೊಂಡು ಹೊರಟನು. ಅಲ್ಲಿ ಹನುಮಂತನು ಧ್ಯಾನಮಗ್ನನಾಗಿ ಕುಳಿತು ಏಳು ಅಗಲವಾದ ಬಾಳೆಲೆಯ ಮೇಲೆ ಇಡೀ ರಾಮಾಯಣದ ಕಥೆಯನ್ನು ಚಂದವಾಗಿ ಬರೆದಿದ್ದನು. ಅದನ್ನು ಓದಿ ವಾಲ್ಮೀಕಿ ಜೋರಾಗಿ ಅಳಲು ಆರಂಭ ಮಾಡಿದನು. ಹನುಮಂತ “ಮಹರ್ಷಿ, ಯಾಕೆ ಅಳುತ್ತಿದ್ದೀರಿ? ನನ್ನ ರಾಮಾಯಣ ಚೆನ್ನಾಗಿಲ್ಲವೇ?” ಎಂದನು.

ಅದಕ್ಕೆ ವಾಲ್ಮೀಕಿ “ಹನುಮಾನ್, ನಿನ್ನ ರಾಮಾಯಣ ರಮ್ಯಾದ್ಭುತ ಆಗಿದೆ. ನಿನ್ನ ರಾಮಾಯಣ ಓದಿದ ನಂತರ ನನ್ನ ರಾಮಾಯಣ ಯಾರೂ ಓದುವುದಿಲ್ಲ!’ ಎಂದು ಮತ್ತೆ ಅಳಲು ಆರಂಭ ಮಾಡಿದನು. ಈ ಮಾತನ್ನು ಕೇಳಿದ ಹನುಮಾನ್ ತಾನು ರಾಮಾಯಣ ಬರೆದಿದ್ದ ಬಾಳೆಲೆಗಳನ್ನು ಅರ್ಧ ಕ್ಷಣದಲ್ಲಿ ಹರಿದು ಹಾಕಿದನು! ಅವನು ವಾಲ್ಮೀಕಿಗೆ ಹೇಳಿದ ಮಾತು ‘ಮಹರ್ಷಿ, ನೀವಿನ್ನು ಆತಂಕ ಮಾಡಬೇಡಿ. ಇನ್ನು ನನ್ನ ರಾಮಾಯಣ ಯಾರೂ ಓದುವುದಿಲ್ಲ!’

hanuman

ಹನುಮಾನ್ ಹೇಳಿದ ಜೀವನ ಸಂದೇಶ

‘ವಾಲ್ಮೀಕಿ ಮಹರ್ಷಿ. ನೀವು ರಾಮಾಯಣ ಬರೆದ ಉದ್ದೇಶ ನಿಮ್ಮನ್ನು ಜಗತ್ತು ನೆನಪಿಟ್ಟುಕೊಳ್ಳಬೇಕು ಎಂದು. ನನಗೆ ಆ ರೀತಿಯ ಆಸೆಗಳು ಇಲ್ಲ. ನಾನು ರಾಮಾಯಣ ಬರೆದ ಉದ್ದೇಶ ನನಗೆ ರಾಮ ನೆನಪಿದ್ದರೆ ಸಾಕು ಎಂದು! ರಾಮನ ಹೆಸರು ರಾಮನಿಗಿಂತ ದೊಡ್ಡದು. ರಾಮ ದೇವರು ನನ್ನ ಹೃದಯದಲ್ಲಿ ಸ್ಥಿರವಾಗಿದ್ದಾನೆ. ನನಗೆ ಇನ್ನು ಈ ರಾಮಾಯಣದ ಅಗತ್ಯ ಇಲ್ಲ!’

ಈಗ ವಾಲ್ಮೀಕಿ ಇನ್ನೂ ಜೋರಾಗಿ ಅಳಲು ತೊಡಗಿದನು. ಅವನ ಅಹಂಕಾರದ ಪೊರೆಯು ಕಳಚಿ ಹೋಗಿತ್ತು. ಆತನು ಒಂದಕ್ಷರವೂ ಮಾತಾಡದೆ ಹನುಮಂತನ ಪಾದಸ್ಪರ್ಶ ಮಾಡಿ ಹಿಂದೆ ಹೋದನು.

ಭರತ ವಾಕ್ಯ

ನಾವು ಮಾಡುವ ಎಲ್ಲಾ ಕೆಲಸಗಳ ಹಿಂದೆ ಒಂದಲ್ಲಾ ಒಂದು ಸ್ವಾರ್ಥ ಇರುತ್ತದೆ. ಕೆಲವರಿಗೆ ದುಡ್ಡಿನ ದಾಹ. ಕೆಲವರಿಗೆ ಕೀರ್ತಿಯ ಮೋಹ. ಇನ್ನೂ ಕೆಲವರಿಗೆ ಅಧಿಕಾರದ ಆಸೆ. ಇನ್ನೂ ಕೆಲವರಿಗೆ ಜನಪ್ರಿಯತೆಯ ಲೋಲುಪತೆ. ಅವುಗಳನ್ನು ಬಿಟ್ಟರೆ ನಾವೂ ಹನುಮಂತನ ಎತ್ತರಕ್ಕೆ ಏರಬಹುದು. ಏನಂತೀರಿ?

ಇದನ್ನೂ ಓದಿ: ರಾಜಮಾರ್ಗ ಅಂಕಣ: ದೇಶದ ಯುವಜನತೆಯ ಹೃದಯದ ಬಡಿತ ಅರ್ಜಿತ್ ಸಿಂಗ್, ನಿಮಗೆ ಹ್ಯಾಪಿ ಬರ್ತ್‌ಡೇ!

Continue Reading

ಅಂಕಣ

ರಾಜಮಾರ್ಗ ಅಂಕಣ: ದೇಶದ ಯುವಜನತೆಯ ಹೃದಯದ ಬಡಿತ ಅರ್ಜಿತ್ ಸಿಂಗ್, ನಿಮಗೆ ಹ್ಯಾಪಿ ಬರ್ತ್‌ಡೇ!

ರಾಜಮಾರ್ಗ ಅಂಕಣ (Rajamarga column): ಅರ್ಜಿತ್ ಸಿಂಗ್‌ (Arijit Singh) ಇಂದು ಜಗತ್ತಿನ ಅತ್ಯಂತ ಜನಪ್ರಿಯ ಗಾಯಕರಲ್ಲಿ ಮೂರನೇ ಸ್ಥಾನವನ್ನು, ಏಷಿಯಾದಲ್ಲಿ ಮೊದಲ ಸ್ಥಾನವನ್ನು ಪಡೆದಿದ್ದಾರೆ ಅಂದರೆ ಆತನ ಪ್ರತಿಭೆ ಮತ್ತು ಸಾಮರ್ಥ್ಯದ ಬಗ್ಗೆ ಅಭಿಮಾನ ಮೂಡುತ್ತದೆ.

VISTARANEWS.COM


on

arijit singh rajamarga column 2
Koo

ದ ಮ್ಯೂಸಿಕಲ್ ಲೆಜೆಂಡ್, ಜೇನು ದನಿಯ ಸರದಾರ

Rajendra-Bhat-Raja-Marga-Main-logo

ರಾಜಮಾರ್ಗ ಅಂಕಣ (Rajamaraga Column): ಏಪ್ರಿಲ್ 25 ಬಂತು ಅಂದರೆ ಅದು ದೇಶದ ಯುವ ಸಂಗೀತ ಪ್ರೇಮಿಗಳಿಗೆ ಬಹಳ ದೊಡ್ಡ ಹಬ್ಬ. ಏಕೆಂದರೆ ಅದು ಅವರ ಹೃದಯದ ಬಡಿತವೇ ಆಗಿರುವ ಅರ್ಜಿತ್ ಸಿಂಗ್‌ (Arijit singh)) ಹುಟ್ಟಿದ ಹಬ್ಬ (Birthday)!

ಆತನ ವ್ಯಕ್ತಿತ್ವ, ಆತನ ಹಾಡುಗಳು, ಆತನ ಸ್ವರ ವೈವಿಧ್ಯ ಎಲ್ಲವೂ ಆತನ ಕೋಟಿ ಕೋಟಿ ಅಭಿಮಾನಿಗಳಿಗೆ ಹುಚ್ಚು ಹಿಡಿಸಿ ಬಿಟ್ಟಿವೆ. ಅದರಿಂದಾಗಿ ಇಂದು ಆತನಿಗೆ ದೇಶದಲ್ಲಿ ಸ್ಪರ್ಧಿಗಳೇ ಇಲ್ಲ ಎನ್ನುವುದನ್ನು ಅವನ ಸ್ಪರ್ಧಿಗಳೇ ಒಪ್ಪಿಕೊಂಡು ಬಿಟ್ಟಿದ್ದಾರೆ! ನಾನು ಇಂದು ಯಾವ ಕಾಲೇಜಿಗೆ ಹೋದರೂ ಅರ್ಜಿತ್ ಧ್ವನಿಯನ್ನು ಅನುಕರಣೆ ಮಾಡಿ ಹಾಡಲು ತೀವ್ರ ಪ್ರಯತ್ನ ಮಾಡುವ ಯುವಕ, ಯುವತಿಯರು ಇದ್ದಾರೆ. 2015ರಿಂದ ಆತನ ಜನಪ್ರಿಯತೆಯ ಗ್ರಾಫ್ ಕೆಳಗೆ ಬಂದದ್ದೇ ಇಲ್ಲ. ಅರ್ಜಿತ್ ಸಿಂಗ್‌ (Arijit Singh) ಇಂದು ಜಗತ್ತಿನ ಅತ್ಯಂತ ಜನಪ್ರಿಯ ಗಾಯಕರಲ್ಲಿ ಮೂರನೇ ಸ್ಥಾನವನ್ನು, ಏಷಿಯಾದಲ್ಲಿ ಮೊದಲ ಸ್ಥಾನವನ್ನು ಪಡೆದಿದ್ದಾರೆ ಅಂದರೆ ಆತನ ಪ್ರತಿಭೆ ಮತ್ತು ಸಾಮರ್ಥ್ಯದ ಬಗ್ಗೆ ಅಭಿಮಾನ ಮೂಡುತ್ತದೆ.

ಆತನದ್ದು ಬಂಗಾಳದ ಸಂಗೀತದ ಹಿನ್ನೆಲೆಯ ಕುಟುಂಬ

ಪಶ್ಚಿಮ ಬಂಗಾಳದ ಮುರ್ಶಿದಾಬಾದ್ ಜಿಲ್ಲೆಯ ಒಂದು ಸಣ್ಣ ಹಳ್ಳಿಯಿಂದ ಬಂದವರು ಅರ್ಜಿತ್. ಅವನ ಅಜ್ಜಿ, ಅವನ ಅತ್ತೆ ಎಲ್ಲರೂ ಚೆನ್ನಾಗಿ ಹಾಡುತ್ತಿದ್ದರು. ಸಹಜವಾಗಿ ಹುಡುಗನಲ್ಲಿ ಸಂಗೀತದ ಆಸಕ್ತಿ ಮೂಡಿತ್ತು. ಒಂಬತ್ತನೇ ವರ್ಷಕ್ಕೆ ರಾಜೇಂದ್ರ ಪ್ರಸಾದ್ ಹಜಾರಿ ಎಂಬ ಶಾಸ್ತ್ರೀಯ ಸಂಗೀತದ ಗುರುವಿನಿಂದ ಸಂಗೀತದ ಕಲಿಕೆ ಆರಂಭವಾಯಿತು. ಬಂಗಾಳದಲ್ಲಿ ರಬೀಂದ್ರ ಸಂಗೀತದ ಪ್ರಭಾವದಿಂದ ಯಾರೂ ಹೊರಬರಲು ಸಾಧ್ಯವಿಲ್ಲ. ಅದರ ಜೊತೆಗೆ ವಿಶ್ವದ ಶ್ರೇಷ್ಠ ಸಂಗೀತಗಾರರಾದ ಮೊಜಾರ್ಟ್ ಮತ್ತು ಬೀತೊವೆನ್ ಅವರ ಹಾಡುಗಳನ್ನು ಕೇಳುತ್ತಾ ಅರ್ಜಿತ್ ಬೆಳೆದರು. ಅದರ ಜೊತೆಗೆ ಕಿಶೋರ್ ಕುಮಾರ್, ಮನ್ನಾಡೆ, ಹೇಮಂತ್ ಕುಮಾರ್ ಅವರ ಹಾಡುಗಳನ್ನು ಕೇಳುತ್ತಾ ಆರ್ಜಿತ್ ತನ್ನದೇ ಸಿಗ್ನೇಚರ್ ಧ್ವನಿಯನ್ನು ಸಂಪಾದನೆ ಮಾಡಿಕೊಂಡರು. ಸೂಫಿ ಹಾಡುಗಳು, ಗಜಲ್, ಪಾಪ್ ಹಾಡುಗಳು, ಶಾಸ್ತ್ರೀಯ ಹಾಡುಗಳು, ಭಜನ್, ಜಾನಪದ ಹಾಡುಗಳು….ಹೀಗೆ ಎಲ್ಲ ವಿಧವಾದ ಹಾಡುಗಳನ್ನು ಅದ್ಭುತವಾಗಿ ಹಾಡಲು ಕಲಿತರು.

ರಿಯಾಲಿಟಿ ಶೋದಲ್ಲಿ ಸೋಲು!

ಅರ್ಜಿತ್ ತನ್ನ 18ನೆಯ ವಯಸ್ಸಿನಲ್ಲಿ FAME GURUKUL ಎಂಬ ಟಿವಿ ರಿಯಾಲಿಟಿ ಶೋದಲ್ಲಿ ಭಾಗವಹಿಸಿದ್ದರು. ಚೆಂದವಾಗಿ ಹಾಡಿದರು ಕೂಡ. ಆದರೆ ಆಡಿಯೆನ್ಸ್ ಪೋಲ್ ಇದ್ದ ಕಾರಣ ಅದರಲ್ಲಿ ಸೋತರು. ಆದರೆ ಆತನ ಧ್ವನಿಯ ಮಾಧುರ್ಯವನ್ನು ಗುರುತಿಸಿದ ನಿರ್ಮಾಪಕ ಸಂಜಯ್ ಲೀಲಾ ಬನ್ಸಾಲಿ ಅವರು ತನ್ನ ಮುಂದಿನ ಸಿನೆಮಾ ಸಾವರಿಯಾದಲ್ಲಿ ಒಂದು ಹಾಡನ್ನು ಆತನಿಂದ ಹಾಡಿಸಿದರು.

ಆದರೆ ಆ ಹಾಡು ಸಿನೆಮಾ ಎಡಿಟ್ ಆಗುವಾಗ ಬಿಟ್ಟು ಹೋಯಿತು! ಮುಂದೆ TIPS ಸಂಗೀತ ಕಂಪೆನಿ ಆತನೊಂದಿಗೆ ಒಪ್ಪಂದ ಮಾಡಿಕೊಂಡು ಹಲವು ಆಲ್ಬಂ ಸಾಂಗ್ಸ್ ರೆಕಾರ್ಡ್ ಮಾಡಿಕೊಂಡಿತು. ಆದರೆ ಅದ್ಯಾವುದೂ ಬಿಡುಗಡೆ ಆಗಲಿಲ್ಲ! ಆತನಲ್ಲಿ ಅಪ್ಪಟ ಪ್ರತಿಭೆ ಇದ್ದರೂ ದುರದೃಷ್ಟವು ಆತನಿಗಿಂತ ಮುಂದೆ ಇತ್ತು! ಆದರೆ ಈ ಸೋಲುಗಳ ನಡುವೆ ಅರ್ಜಿತ್ ಸಂಗೀತವನ್ನು ಬಿಟ್ಟು ಹೋಗಿಲ್ಲ ಅನ್ನೋದು ಅದ್ಭುತ!

ಮುಂದೆ ಇನ್ನೊಂದು ಟಿವಿ ರಿಯಾಲಿಟಿ ಶೋ (10ಕೆ 10ಲೆ ಗಯೇ ದಿಲ್)ನಲ್ಲಿ ಭಾಗವಹಿಸಿ ಪ್ರಥಮ ಸ್ಥಾನ ಗೆದ್ದಾಗ ಆತನ ಬದುಕಿನಲ್ಲಿ ದೊಡ್ಡ ತಿರುವು ಉಂಟಾಯಿತು. ಆಗ ದೊರೆತ ಹತ್ತು ಲಕ್ಷ ರೂಪಾಯಿ ಬಹುಮಾನದ ಮೊತ್ತವನ್ನು ತಂದು ಮುಂಬೈಯಲ್ಲಿ ಒಂದು ಸ್ಟುಡಿಯೋ ಸ್ಥಾಪನೆ ಮಾಡಿದರು. ಒಂದು ಪುಟ್ಟ ಬಾಡಿಗೆ ಮನೆಯಲ್ಲಿ ವಾಸ, ಒಂದು ಹೊತ್ತಿನ ಊಟವೂ ಕಷ್ಟ ಆಗಿದ್ದ ದಿನಗಳು ಅವು! ಅರ್ಜಿತ್ ಒಂದು ದೊಡ್ಡ ಬ್ರೇಕ್ ಥ್ರೂ ಕಾಯುತ್ತ ಕೂತಿದ್ದರು. ಈ ಅವಧಿಯಲ್ಲಿ ನೂರಾರು ಜಿಂಗಲ್, ಜಾಹೀರಾತುಗಳ ಸಂಗೀತವನ್ನು ಕಂಪೋಸ್ ಮಾಡಿ ಸ್ವತಃ ಹಾಡಿದರು.

arijit singh rajamarga column 2

2011ರಲ್ಲಿ ಅರ್ಜಿತ್ ಭಾಗ್ಯದ ಬಾಗಿಲು ತೆರೆಯಿತು!

ಆ ವರ್ಷ ಬಿಡುಗಡೆ ಆದ ಮರ್ಡರ್ 2 ಸಿನೆಮಾದ ‘ಫೀರ್ ಮೊಹಬ್ಬತೆ ‘ ಹಾಡು ಸೂಪರ್ ಹಿಟ್ ಆಯಿತು. ಬಾಲಿವುಡ್ ಆತನ ಟಿಪಿಕಲ್ ಧ್ವನಿಗೆ ಮಾರುಹೋಯಿತು. ಮುಂದೆ ರಬಟಾ ( ಏಜೆಂಟ್ ವಿನೋದ್), ಉಸ್ಕಾ ಹೀ ಬನಾನಾ (ಎವಿಲ್ ರಿರ್ಟರ್ನ್) ಲಾಲ್ ಇಷ್ಕ್ ಮತ್ತು ಗೋಲಿಯೋನ್ ಕಿ ರಾಸ ಲೀಲಾ (ರಾಮ್ ಲೀಲಾ) ಮೊದಲಾದ ಹಾಡುಗಳು ಭಾರೀ ಹಿಟ್ ಆದವು. ಮನವಾ ಲಾಗೇ ಮತ್ತು ಮಸ್ತ್ ಮಗನ್ ಹಾಡುಗಳು ಇಡೀ ಬಾಲಿವುಡ್ ಇಂಡಸ್ಟ್ರಿಯಲ್ಲಿ ಸಂಚಲನ ಮೂಡಿಸಿದವು. ಪದ್ಮಾವತ್ ಸಿನೆಮಾದ ‘ಬಿನ್ ತೆ ದಿಲ್ ‘ ಹಾಡಿಗೆ ರಾಷ್ಟ್ರಪ್ರಶಸ್ತಿಯು ಒಲಿದು ಬಂತು. 7 ಫಿಲಂಫೇರ್ ಪ್ರಶಸ್ತಿಗಳು ಬಂದವು. ಹಿಂದೀ, ತೆಲುಗು, ತಮಿಳು, ಬಂಗಾಳಿ ಸಿನೆಮಾಗಳಲ್ಲಿ ಅರ್ಜಿತ್ ಅವರಿಗೆ ಭಾರೀ ಡಿಮಾಂಡ್ ಕ್ರಿಯೇಟ್ ಆಯಿತು. ಭಾರೀ ದೊಡ್ಡ ಫ್ಯಾನ್ ಬೇಸ್ ಡೆವಲಪ್ ಆಯಿತು. ಇಂದು ಅರ್ಜಿತ್ ತನ್ನ ಸಂಗೀತದ ಪ್ರತಿಭೆಯಿಂದ ಭಾರೀ ಎತ್ತರಕ್ಕೆ ಬೆಳೆದಿದ್ದಾರೆ.

ಜವಾನ್, ಡುಮ್ಕಿ, ಅನಿಮಲ್ ಮೊದಲಾದ ಇತ್ತೀಚಿನ ಸೂಪರ್ ಹಿಟ್ ಸಿನಿಮಾಗಳಲ್ಲಿ ಆರ್ಜಿತ್ ಹಾಡಿದ ಹಾಡುಗಳು ಇವೆ. ಆತ ಹಾಡಿದ ಎಲ್ಲ ಹಾಡುಗಳೂ ಸೂಪರ್ ಹಿಟ್ ಆಗಿವೆ.

ಸ್ಟುಡಿಯೋ ಹಾಡುಗಳು ಮತ್ತು ಸ್ಟೇಜ್ ಕಾರ್ಯಕ್ರಮಗಳು

ಹಿನ್ನೆಲೆ ಹಾಡುಗಳು ಮತ್ತು ಆಲ್ಬಂ ಹಾಡುಗಳನ್ನು ಸ್ಟುಡಿಯೋ ಒಳಗೆ ಹಾಡುವ ಟ್ಯಾಲೆಂಟ್ ಒಂದೆಡೆ. ಸ್ಟೇಜ್ ಮೇಲೆ ಲಕ್ಷಾಂತರ ಮಂದಿ ಹುಚ್ಚು ಅಭಿಮಾನಿಗಳ ಮುಂದೆ ಗಿಟಾರ್ ಹಿಡಿದುಕೊಂಡು ಹಾಡುವ ಟ್ಯಾಲೆಂಟ್ ಇನ್ನೊಂದೆಡೆ. ಆರ್ಜಿತ್ ಎರಡೂ ಕಡೆಯಲ್ಲಿ ಗೆದ್ದಿದ್ದಾರೆ. ದೇಶ ವಿದೇಶಗಳ ನೂರಾರು ವೇದಿಕೆಗಳಲ್ಲಿ ಅವರ ಲೈವ್ ಸ್ಟೇಜ್ ಶೋಗಳಿಗೆ ಅಭಿಮಾನಿಗಳು ಕಿಕ್ಕಿರಿದು ಸೇರುತ್ತಾರೆ. ಆರ್ಜಿತ್ ಮತ್ತು ಶ್ರೇಯಾ ಘೋಷಾಲ್ ಸಂಗೀತದ ಶೋಗಳಿಗೆ ಇಂದು ಭಾರೀ ಡಿಮಾಂಡ್ ಇದೆ!

ಲೆಟ್ ದೇರ್ ಬಿ ಲೈಟ್ ಎಂಬ NGO ಸ್ಥಾಪನೆ ಮಾಡಿ ಆರ್ಜಿತ್ ತನ್ನ ಸಂಪಾದನೆಯ ಬಹು ದೊಡ್ಡ ಭಾಗವನ್ನು ಚಾರಿಟಿ ಉದ್ದೇಶಕ್ಕೆ ಖರ್ಚು ಮಾಡುತ್ತಿರುವುದು ನಿಜಕ್ಕೂ ಅಭಿನಂದನೀಯ. ಆರ್ಜಿತ್ ಇಂದು ಭಾರತದ ನಂಬರ್ ಒನ್ ಹಿನ್ನೆಲೆ ಗಾಯಕ ಎಂದು ಸೋನು ನಿಗಮ್ ಸಾಕಷ್ಟು ವೇದಿಕೆಯಲ್ಲಿ ಹೇಳಿದ್ದಾರೆ. ಅವರಿಬ್ಬರೂ ಒಳ್ಳೆಯ ಗೆಳೆಯರು ಎಂದು ಕೂಡ ಸಾಬೀತಾಗಿದೆ.

ಅಂತಹ ಅನನ್ಯ ಪ್ರತಿಭೆ, ಜೇನು ದನಿಯ ಸರದಾರ ಅರ್ಜಿತ್ ಸಿಂಗ್ ಅವರಿಗೆ ಇಂದು ನೆನಪಲ್ಲಿ ಹುಟ್ಟುಹಬ್ಬದ ಶುಭಾಶಯ ಹೇಳಿ ಆಯ್ತಾ.

ಇದನ್ನೂ ಓದಿ: ರಾಜಮಾರ್ಗ ಅಂಕಣ: ವಿಶ್ವವಿಜೇತನಾಗುವ ತವಕದಲ್ಲಿರುವ ಚೆಸ್ ಆಟಗಾರ ದೊಮ್ಮರಾಜು ಗುಕೇಶ್

Continue Reading
Advertisement
Karnataka Weather Forecast
ಮಳೆ14 mins ago

Karnataka Weather: ಯೆಲ್ಲೋ ಅಲರ್ಟ್‌; ಬೆಂಗಳೂರು ಸೇರಿ ಹಲವೆಡೆ ಗುಡುಗು ಸಹಿತ ಭಾರಿ ಮಳೆ ಎಚ್ಚರಿಕೆ

Pakistan PM
ಸಂಪಾದಕೀಯ43 mins ago

ವಿಸ್ತಾರ ಸಂಪಾದಕೀಯ: ಪಾಕಿಸ್ತಾನ ಮೊದಲು ತನ್ನ ತಟ್ಟೆಯಲ್ಲಿ ಬಿದ್ದಿರುವ ನೊಣ ತೆಗೆಯಲಿ, ಪಾಠ ಕಲಿಯಲಿ

Tips For Healthy Skin
ಆರೋಗ್ಯ44 mins ago

Tips For Healthy Skin: ಕಡಲೆಹಿಟ್ಟೆಂಬ ಶತಮಾನಗಳ ಹಳೆಯ ಸೌಂದರ್ಯವರ್ಧಕ!

Dina Bhavishya
ಭವಿಷ್ಯ2 hours ago

Dina Bhavishya: ವೀಕೆಂಡ್‌ನಲ್ಲೂ ಬಾಸ್‌ ಕಾಟ ತಪ್ಪಲ್ಲ; ಈ ರಾಶಿಯವರಿಗೆ ಇಡೀ ದಿನ ಕೆಲಸದ ಒತ್ತಡ

Rain News
ಕರ್ನಾಟಕ7 hours ago

Rain News: ಪ್ರತ್ಯೇಕ ಮಳೆ ಅವಘಡ; ಸಿಡಿಲು ಬಡಿದು ನವ ವಿವಾಹಿತ ಸಾವು, ಕಾರ್ಮಿಕನ ಸ್ಥಿತಿ ಗಂಭೀರ

ಪ್ರಮುಖ ಸುದ್ದಿ7 hours ago

IPL 2024 : ಮುಂಬೈ ವಿರುದ್ಧ ಕೆಕೆಆರ್​ಗೆ 24 ರನ್​ ಗೆಲುವು; ಪಾಂಡ್ಯಾ ಬಳಗಕ್ಕೆ ಮತ್ತೊಂದು ಆಘಾತ

Nijjar Killing
ವಿದೇಶ7 hours ago

Nijjar Killing: ಖಲಿಸ್ತಾನಿ ಉಗ್ರ ನಿಜ್ಜರ್‌ ಹತ್ಯೆಯ ಆರೋಪಿಗಳನ್ನು ಬಂಧಿಸಿದ ಕೆನಡಾ ಪೊಲೀಸರು; ಯಾರಿವರು?

Rohith Vemula
ದೇಶ7 hours ago

Rohith Vemula: ರೋಹಿತ್‌ ವೇಮುಲ ದಲಿತನಲ್ಲ ಎಂದ ಪೊಲೀಸರು; ಮರು ತನಿಖೆಗೆ ‘ಕೈ’ ಸರ್ಕಾರ ಆದೇಶ!

Rinku Singh
ಪ್ರಮುಖ ಸುದ್ದಿ8 hours ago

Rinku Singh : ಕೊಹ್ಲಿಯ ಬ್ಯಾಟ್​ನಲ್ಲಿ ರಿಂಕು ಚೆನ್ನಾಗಿ ಆಡುತ್ತಿಲ್ಲ; ನೆಟ್ಟಿಗರಿಂದ ಟ್ರೋಲ್​!

honour killing
ವಿಜಯಪುರ8 hours ago

Honor Killing: ಮರ್ಯಾದೆಗಾಗಿ ಗರ್ಭಿಣಿಯನ್ನು ಸುಟ್ಟು ಕೊಂದ ಇಬ್ಬರಿಗೆ ಗಲ್ಲು ಶಿಕ್ಷೆ, 6 ಮಂದಿಗೆ ಜೀವಾವಧಿ‌ ಶಿಕ್ಷೆ

Sharmitha Gowda in bikini
ಕಿರುತೆರೆ7 months ago

Geetha Serial Kannada: ನಿದ್ದೆ ಕದ್ದ ಚೋರಿ! ನಟಿ `ಭಾನುಮತಿ’ ಹಾಟ್‌ ಪೋಟೊಗಳಿಗೆ ಫ್ಯಾನ್ಸ್ ಫುಲ್ ಫಿದಾ

Kannada Serials
ಕಿರುತೆರೆ7 months ago

Kannada Serials TRP: 2ನೇ ಸ್ಥಾನದಲ್ಲಿ 2 ಧಾರಾವಾಹಿಗಳು; ಟಿಆರ್‌ಪಿ ರೇಸ್‌ನಲ್ಲಿಲ್ಲ ಭಾಗ್ಯಲಕ್ಷ್ಮೀ!

Bigg Boss- Saregamapa 20 average TRP
ಕಿರುತೆರೆ7 months ago

Kannada Serials TRP: ಏಳನೇ ಸ್ಥಾನಕ್ಕೆ ʻಅಮೃತಧಾರೆʼ ಕುಸಿತ; ಬಿಗ್‌ ಬಾಸ್‌-ಸರಿಗಮಪ ಟಿಆರ್‌ಪಿ ಎಷ್ಟು?

galipata neetu
ಕಿರುತೆರೆ5 months ago

Kanyadana Serial: ಕಿರುತೆರೆಗೆ ಮತ್ತೆ ಎಂಟ್ರಿ ಕೊಟ್ಟ ʻಗಾಳಿಪಟʼ ಖ್ಯಾತಿಯ ʻನೀತುʼ!

Kannada Serials
ಕಿರುತೆರೆ7 months ago

Kannada Serials TRP: ನಾಲ್ಕನೇ ಸ್ಥಾನಕ್ಕೆ ಕುಸಿತ ಕಂಡ ʻಸೀತಾ ರಾಮʼ; ಟಿಆರ್‌ಪಿ ರೇಸ್‌ಗೆ ʻಭಾಗ್ಯಲಕ್ಷ್ಮಿʼ ಬ್ಯಾಕ್‌!

Kannada Serials
ಕಿರುತೆರೆ7 months ago

Kannada Serials TRP: ಟಿಆರ್‌ಪಿಯಲ್ಲಿ ʻಭಾಗ್ಯಲಕ್ಷ್ಮೀʼ ಹವಾ; ʻಪುಟ್ಟಕ್ಕನ ಮಕ್ಕಳುʼ ಧಾರಾವಾಹಿಗೆ ಸಂಕಷ್ಟ!

Bigg Boss' dominates TRP; Sita Rama fell to the sixth position
ಕಿರುತೆರೆ6 months ago

Kannada Serials TRP: ಟಿಆರ್‌ಪಿಯಲ್ಲಿ ʻಬಿಗ್ ಬಾಸ್ʼದೇ ಮೇಲುಗೈ; 6ನೇ ಸ್ಥಾನಕ್ಕೆ ಕುಸಿದ ʻಸೀತಾ ರಾಮʼ

geetha serial Dhanush gowda engagement
ಕಿರುತೆರೆ5 months ago

Dhanush Gowda: ಗೀತಾ ಧಾರಾವಾಹಿ ನಟನ ನಿಶ್ಚಿತಾರ್ಥ; ಭವ್ಯಾಳ ಕಮೆಂಟ್‌ ಬಾಕ್ಸ್‌ ಆಫ್‌!

varun
ಕಿರುತೆರೆ6 months ago

Brindavana Serial: ʼಬೃಂದಾವನʼ ಧಾರಾವಾಹಿಯಲ್ಲಿ ದೊಡ್ಡ ಟ್ವಿಸ್ಟ್‌; ಪ್ರಮುಖ ಪಾತ್ರಧಾರಿಯೇ ಬದಲು

Kannada Serials
ಕಿರುತೆರೆ8 months ago

Kannada Serials TRP: ಟಿಆರ್‌ಪಿಯಲ್ಲಿ ಏರಿಕೆ ಕಂಡ ʻಅಮೃತಧಾರೆʼ; ʻಗಟ್ಟಿಮೇಳʼಕ್ಕೆ ನಾಲ್ಕನೇ ಸ್ಥಾನ!

Dina Bhavishya
ಭವಿಷ್ಯ2 hours ago

Dina Bhavishya: ವೀಕೆಂಡ್‌ನಲ್ಲೂ ಬಾಸ್‌ ಕಾಟ ತಪ್ಪಲ್ಲ; ಈ ರಾಶಿಯವರಿಗೆ ಇಡೀ ದಿನ ಕೆಲಸದ ಒತ್ತಡ

Bengaluru Rains
ಮಳೆ15 hours ago

Bengaluru Rains:‌ ಅಬ್ಬಾಬ್ಬ ಲಾಟ್ರಿ.. ಕಂಗ್ರಾಜುಲೇಷನ್ ಬ್ರದರ್.. ಬೆಂಗಳೂರು ಮಳೆಗೆ ನೆಟ್ಟಿಗರ ವಿಷ್‌, ಫುಲ್ ಖುಷ್‌

Dina Bhavishya
ಭವಿಷ್ಯ1 day ago

Dina Bhavishya: ಈ ರಾಶಿಯ ವಿವಾಹ ಅಪೇಕ್ಷಿತರಿಗೆ ಸಿಗಲಿದೆ ಗುಡ್‌ ನ್ಯೂಸ್‌

Prajwal Revanna Case Another victim gives statement before judge Will Revanna get anticipatory bail
ಕ್ರೈಂ1 day ago

Prajwal Revanna Case: ನ್ಯಾಯಾಧೀಶರ ಮುಂದೆ 2 ಗಂಟೆ ಹೇಳಿಕೆ ನೀಡಿದ ಮತ್ತೊಬ್ಬ ಸಂತ್ರಸ್ತೆ; ರೇವಣ್ಣಗೆ ಸಿಗುತ್ತಾ ನಿರೀಕ್ಷಣಾ ಜಾಮೀನು?

Dina Bhavishya
ಭವಿಷ್ಯ2 days ago

Dina Bhavishya : ದಿನದ ಕೊನೆಯಲ್ಲಿ ಈ ರಾಶಿಯವರು ಯಾವುದಾದರೂ ಶುಭ ಸುದ್ದಿ ಕೇಳುವಿರಿ

dina bhavishya read your daily horoscope predictions for April 30 2024
ಭವಿಷ್ಯ4 days ago

Dina Bhavishya: ಈ ರಾಶಿಗಳ ಉದ್ಯೋಗಿಗಳಿಗೆ ಇಂದು ಒತ್ತಡ ಹೆಚ್ಚಲಿದೆ!

PM Narendra modi in Bagalakote and Attack on Congress
Lok Sabha Election 20245 days ago

PM Narendra Modi: ಒಬಿಸಿಗೆ ಇದ್ದ ಮೀಸಲಾತಿ ಪ್ರಮಾಣಕ್ಕೆ ಮುಸ್ಲಿಮರನ್ನು ಸೇರಿಸಲು ಕಾಂಗ್ರೆಸ್‌ ಷಡ್ಯಂತ್ರ: ಮೋದಿ ವಾಗ್ದಾಳಿ

PM Narendra modi in Bagalakote for Election Campaign and here is Live telecast
Lok Sabha Election 20245 days ago

PM Narendra Modi Live: ಇಂದು ಬಾಗಲಕೋಟೆಯಲ್ಲಿ ನರೇಂದ್ರ ಮೋದಿ ಹವಾ; ಲೈವ್‌ಗಾಗಿ ಇಲ್ಲಿ ವೀಕ್ಷಿಸಿ

dina bhavishya read your daily horoscope predictions for April 29 2024
ಭವಿಷ್ಯ5 days ago

Dina Bhavishya : ಈ ರಾಶಿಯವರಿಗೆ ಇಂದು ಸಂತೋಷವೇ ಸಂತೋಷ! ಹೂಡಿಕೆಯಲ್ಲಿ ಲಾಭ ಯಾರಿಗೆ?

Vote Jihad
Lok Sabha Election 20246 days ago

PM Narendra Modi: ಇವಿಎಂ ದೂರುವ ಕಾಂಗ್ರೆಸ್‌ಗೆ ಸೋಲಿನ ಭೀತಿ; ಕರ್ನಾಟಕದಲ್ಲಿ 1 ಸೀಟನ್ನೂ ಗೆಲ್ಲಲ್ಲವೆಂದ ಮೋದಿ!

ಟ್ರೆಂಡಿಂಗ್‌