Kamal Haasan In Prabhas Starrer 'Project K', To Earn Rs. 100 Cr From Film Kamal Haasan : ʻಪ್ರಾಜೆಕ್ಟ್‌ ಕೆʼ ಸಿನಿಮಾದಲ್ಲಿ ಕಮಲ್ ಹಾಸನ್; ಸಂಭಾವನೆ ಎಷ್ಟು ನೋಡಿ! - Vistara News

South Cinema

Kamal Haasan : ʻಪ್ರಾಜೆಕ್ಟ್‌ ಕೆʼ ಸಿನಿಮಾದಲ್ಲಿ ಕಮಲ್ ಹಾಸನ್; ಸಂಭಾವನೆ ಎಷ್ಟು ನೋಡಿ!

ಇದೀಗ ಪ್ರಭಾಸ್‌ ಅವರ ಮುಂಬರುವ ಚಿತ್ರ ‘ಪ್ರಾಜೆಕ್ಟ್ ಕೆ’ ನಲ್ಲಿ ಕಮಲ್ ಹಾಸನ್ (Kamal Haasan) ಕಾಣಿಸಿಕೊಳ್ಳಲಿದ್ದಾರೆ ಎಂದು ವರದಿಯಾಗಿದೆ.

VISTARANEWS.COM


on

Kamal Haasan In Prabhas Starrer 'Project K'
ಮಹತ್ವದ, ಕುತೂಹಲಕರ ಸುದ್ದಿಗಾಗಿ ಫಾಲೊ ಮಾಡಿ
Koo

ಬೆಂಗಳೂರು: ತೆಲುಗು ನಟ ಪ್ರಭಾಸ್ ಸದ್ಯ ʼಆದಿ ಪುರುಷ್‌ʼ ಸಿನಿಮಾ ಪ್ರಚಾರ ಕಾರ್ಯಗಳಲ್ಲಿ ಬ್ಯುಸಿಯಾಗಿದ್ದಾರೆ. ಈಗಾಗಲೇ ಪ್ರಶಾಂತ್‌ ನೀಲ್‌ ನಿರ್ದೇಶನದ ʼಸಲಾರ್‌ʼ ಸಿನಿಮಾ ಶೂಟಿಂಗ್‌ನಲ್ಲಿಯೂ ತೊಡಗಿಸಿಕೊಂಡಿದ್ದಾರೆ. ಇದೀಗ ಪ್ರಭಾಸ್‌ ಅವರ ಮುಂಬರುವ ಚಿತ್ರ ‘ಪ್ರಾಜೆಕ್ಟ್ ಕೆ’ ನಲ್ಲಿ ಕಮಲ್ ಹಾಸನ್ (Kamal Haasan) ಕಾಣಿಸಿಕೊಳ್ಳಲಿದ್ದಾರೆ ಎಂದು ವರದಿಯಾಗಿದೆ. ಈ ಚಿತ್ರದಲ್ಲಿ ಕಮಲ್ ಹಾಸನ್ ವಿಲನ್‌ ಪಾತ್ರದಲ್ಲಿ ನಟಿಸಲಿದ್ದು, ದೀಪಿಕಾ ಪಡುಕೋಣೆ ಕೂಡ ಪ್ರಮುಖ ಪಾತ್ರದಲ್ಲಿ ನಟಿಸಲಿದ್ದಾರೆ ಎನ್ನಲಾಗಿದೆ. ಈ ಬಗ್ಗೆ ಕಾರ್ತಿಕ್ ಡಿಪಿ ಟ್ವಿಟರ್‌ನಲ್ಲಿ ಸುದ್ದಿಯನ್ನು ಹಂಚಿಕೊಂಡಿದ್ದಾರೆ. ಭಾರತದ ಮೆಗಾ ಪ್ರಾಜೆಕ್ಟ್ , ಪ್ರಾಜೆಕ್ಟ್‌ ಕೆ ಸಿನಿಮಾದಲ್ಲಿ ಪ್ರಭಾಸ್ ಮತ್ತು ಕಮಲಹಾಸನ್ ಎಂದು ಅವರು ಬರೆದಿದ್ದಾರೆ.

ವರದಿಗಳ ಪ್ರಕಾರ, ಕಮಲ್‌ ಹಾಸನ್‌ ಆಗಸ್ಟ್ 2023 ಆರಂಭದಲ್ಲಿ ನಾಗ್ ಅಶ್ವಿನ್ ನಿರ್ದೇಶನದ ಪ್ರಾಜೆಕ್ಟ್‌ ಕೆ ಸಿನಿಮಾದ ಶೂಟಿಂಗ್‌ನಲ್ಲಿ ಭಾಗಿಯಾಗಲಿದ್ದಾರೆ ಎನ್ನಲಾಗಿದೆ. ಕಾರ್ತಿಕ್ ಅವರ ಟ್ವೀಟ್‌ನ ಪ್ರಕಾರ, ಕಮಲ್ ಹಾಸನ್ ಅವರು ತಮ್ಮ ಭಾಗಗಳ ಚಿತ್ರೀಕರಣಕ್ಕಾಗಿ ಆಗಸ್ಟ್ ಮೀಸಲಿಟ್ಟಿದ್ದಾರೆ. ಪ್ರಾಜೆಕ್ಟ್‌ ಕೆ ಸಿನಿಮಾಗಾಗಿ ಅವರು 100 ಕೋಟಿ ರೂ. ಸಂಭಾವನೆ ಪಡೆದಿದ್ದಾರೆ ಎಂದು ವರದಿಯಾಗಿದೆ. ‘ಪ್ರಾಜೆಕ್ಟ್ ಕೆ’ ತೆಲುಗು ಚಿತ್ರರಂಗದಲ್ಲಿ ದೀಪಿಕಾ ಪಡುಕೋಣೆ ಅವರ ಚೊಚ್ಚಲ ಚಿತ್ರವಾಗಿದೆ. ಈ ಚಿತ್ರದಲ್ಲಿ ಅಮಿತಾಭ್‌ ಬಚ್ಚನ್, ದಿಶಾ ಪಟಾನಿ ನಟಿಸುವ ಸಾಧ್ಯತೆಯಿದೆ ಮತ್ತು ದಕ್ಷಿಣ ಚಿತ್ರರಂಗದ ಅನೇಕ ಪ್ರಮುಖ ನಟರು ವಿಶೇಷ ಅತಿಥಿ ಪಾತ್ರದಲ್ಲಿ ನಟಿಸುವ ಸಂಭವವಿದೆ. ನಾಗ್ ಅಶ್ವಿನ್ ನಿರ್ದೇಶನದ ಈ ಸಿನಿಮಾ ಎರಡು ಭಾಗಗಳಲ್ಲಿ ಬಿಡುಗಡೆಯಾಗಲಿದೆ ಮತ್ತು ಮೊದಲ ಭಾಗವು 2024ರ ಜನವರಿ 12ರಂದು ಮಕರ ಸಂಕ್ರಾಂತಿ ಸಂದರ್ಭದಲ್ಲಿ ಥಿಯೇಟರ್‌ಗಳಲ್ಲಿ ಬರುವ ನಿರೀಕ್ಷೆಯಿದೆ.

ಇದನ್ನೂ ಓದಿ: Kamal Haasan: ಇಂಡಿಯನ್‌ 2 ಸಿನಿಮಾದಲ್ಲಿ ಸಿದ್ಧಾರ್ಥ್; ಕಮಲ್‌ ಜತೆ ಯಾವ ಪಾತ್ರದಲ್ಲಿ ಇವರ ಕಮಾಲ್‌?

“ಪ್ರಾಜೆಕ್ಟ್ ಕೆ ಸಿನಿಮಾದ ಕಥಾವಸ್ತು ತುಂಬಾ ದೊಡ್ಡದಾಗಿದೆ. ಹಾಗಾಗಿ ತಯಾರಕರು ಇದನ್ನು 2 ಭಾಗದ ಸಿನಿಮಾ ಮಾಡಲು ನಿರ್ಧರಿಸಿದ್ದಾರೆ. ಮೊದಲ ಭಾಗದಲ್ಲಿ ಸಿನಿಮಾ ಜಗತ್ತನ್ನು ಪರಿಚಯಿಸಿ, ಸಂಘರ್ಷವನ್ನು ಆರಂಭಿಸುತ್ತದೆ. ಬಾಹುಬಲಿ ಫ್ರಾಂಚೈಸ್‌ನಂತೆಯೇ ದ್ವಿತೀಯ ಭಾಗದಲ್ಲಿ ಇಡೀ ಚಿತ್ರ ನಾಟಕವು ತೆರೆದುಕೊಳ್ಳಲಿದೆ. ಇದು ಭಾರತೀಯ ಚಿತ್ರರಂಗವು ಹಿಂದೆಂದೂ ಕಾಣದ ವಿಶೇಷ ಸಿನಿಮಾವಾಗಿರಲಿದೆ” ಎಂದು ಮೂಲಗಳು ತಿಳಿಸಿವೆ. ಈ ಸಿನಿಮಾದಲ್ಲಿ ಪ್ರಭಾಸ್‌ ವಿಭಿನ್ನ ರೀತಿಯ ಲುಕ್‌ನಲ್ಲಿ ಕಾಣಿಸಿಕೊಳ್ಳಲಿದ್ದಾರೆ.

ಕ್ಷಣ ಕ್ಷಣದ ಮಾಹಿತಿಗಾಗಿ Vistara News FaceBook ಪೇಜ್ ಫಾಲೋ ಮಾಡಿ
ಮಹತ್ವದ ಮಾಹಿತಿಗಾಗಿ ವಿಸ್ತಾರ ನ್ಯೂಸ್ ಆ್ಯಪ್ ಉಚಿತವಾಗಿ ಡೌನ್ ಲೋಡ್ ಮಾಡಿಕೊಳ್ಳಿ: Andriod App | IOS App

ಸ್ಯಾಂಡಲ್ ವುಡ್

Kotee Movie Kannada: ಕಿಚ್ಚ ಸುದೀಪ್​ಗೆ ‘ಕೋಟಿ’ ಸಿನಿಮಾದ ಮೊದಲ ಟಿಕೆಟ್​!

Kotee Movie Kannada: ಈಗಾಗಲೇ ‘ಕೋಟಿ’ ಚಿತ್ರದ ಟ್ರೈಲರ್‌ ಬಿಡುಗಡೆಗೊಂಡಿದ್ದು ಭಾರಿ ಮೆಚ್ಚುಗೆ ಗಳಿಸುತ್ತಿದೆ. ಡಾಲಿ ಧನಂಜಯ್ ‘ಕೋಟಿ’ ಎಂಬ ಒಬ್ಬ ಸಾಮಾನ್ಯ ಡ್ರೈವರ್‌ ಪಾತ್ರದಲ್ಲಿ ಕಾಣಿಸಿಕೊಂಡಿದ್ದು, ಕೋಟಿಗೆ ಯಾರಿಗೂ ಮೋಸ ಮಾಡದೆ, ನೋವು ನೀಡದೆ ಒಂದು ಕೋಟಿ ರೂಪಾಯಿ ದುಡಿದು ತನ್ನ‌ ಕುಟುಂಬವನ್ನು ಚೆನ್ನಾಗಿ ನೋಡಿಕೊಳ್ಳುವ ಬಯಕೆ. ಕೋಟಿಯ ಈ ಪಯಣದ ಕಥಾಹಂದರವನ್ನು‌ ಹೊಂದಿರುವ ಈ ಸಿನಿಮಾ ಜೂನ್ 14ಕ್ಕೆ ಬಿಡುಗಡೆಯಾಗಲಿದೆ.

VISTARANEWS.COM


on

Kotee Movie Kannada Team Gives First Ticket To Kichcha Sudeep
Koo

ಬೆಂಗಳೂರು: ಡಾಲಿ‌ ಧನಂಜಯ ಅಭಿನಯದ ‘ಕೋಟಿ’ ಸಿನಿಮಾದ (Kotee Movie Kannada) ಮೊದಲ‌ ಟಿಕೇಟನ್ನು ಚಿತ್ರತಂಡ ಅಭಿನಯ ಚಕ್ರವರ್ತಿ ಕಿಚ್ಚ ಸುದೀಪ್ ಅವರಿಗೆ ನೀಡಿದೆ. ಅದ್ಧೂರಿಯಾಗಿ ನಡೆದ ʻಕೋಟಿʼ ಸಿನಿಮಾದ ವಿಶೇಷ ಪ್ರೀ ರಿಲೀಸ್ ಟಿವಿ ಕಾರ್ಯಕ್ರಮಕ್ಕೆ ಸುದೀಪ್ ಆಗಮಿಸಿ ಸುಮಾರು ಒಂದು ಗಂಟೆಗಳಿಗೂ ಅಧಿಕ ಸಮಯ ವೇದಿಕೆಯ ಮೇಲಿದ್ದು‌ ನೆರೆದಿದ್ದ ಜನರ ರಂಜಿಸಿದರು. ಇದೇ ವೇದಿಕೆಯಲ್ಲಿ ಚಿತ್ರತಂಡ ಅಭಿನಯ ಚಕ್ರವರ್ತಿ ಸುದೀಪ್ ಅವರಿಗೆ ʻಕೋಟಿʼಯ ಮೊದಲ ಟಿಕೇಟ್ ನೀಡಿತು. ಚಿತ್ರದ ಹೊಸ ಪೋಸ್ಟರ್‌ವೊಂದನ್ನು ಬಿಡುಗಡೆ ಮಾಡಿದ ಕಿಚ್ಚ ನಾಯಕನಟ ಧನಂಜಯ್ ಮತ್ತು ನಿರ್ದೇಶಕ ಪರಮ್ ಅವರಿಗೆ ಯಶಸ್ಸು‌ ಸಿಗಲಿ ಎಂದು ಶುಭ ಕೋರಿದರು.

ಈಗಾಗಲೇ ‘ಕೋಟಿ’ ಚಿತ್ರದ ಟ್ರೈಲರ್‌ ಬಿಡುಗಡೆಗೊಂಡಿದ್ದು ಭಾರಿ ಮೆಚ್ಚುಗೆ ಗಳಿಸುತ್ತಿದೆ. ಡಾಲಿ ಧನಂಜಯ್ ‘ಕೋಟಿ’ ಎಂಬ ಒಬ್ಬ ಸಾಮಾನ್ಯ ಡ್ರೈವರ್‌ ಪಾತ್ರದಲ್ಲಿ ಕಾಣಿಸಿಕೊಂಡಿದ್ದು, ಕೋಟಿಗೆ ಯಾರಿಗೂ ಮೋಸ ಮಾಡದೆ, ನೋವು ನೀಡದೆ ಒಂದು ಕೋಟಿ ರೂಪಾಯಿ ದುಡಿದು ತನ್ನ‌ ಕುಟುಂಬವನ್ನು ಚೆನ್ನಾಗಿ ನೋಡಿಕೊಳ್ಳುವ ಬಯಕೆ. ಕೋಟಿಯ ಈ ಪಯಣದ ಕಥಾಹಂದರವನ್ನು‌ ಹೊಂದಿರುವ ಈ ಸಿನಿಮಾ ಜೂನ್ 14ಕ್ಕೆ ಬಿಡುಗಡೆಯಾಗಲಿದೆ.

ವರ್ಷದ ಮೊದಲಾರ್ಧದಲ್ಲಿ ಯಾವುದೇ ದೊಡ್ಡ ಗೆಲುವು ಕಾಣದೆ ಕಂಗೆಟ್ಟಿರುವ ಕನ್ನಡ ಇಂಡಸ್ಟ್ರಿಗೆ ಅಪ್ಪಟ ಕನ್ನಡ ಮಣ್ಣಿನ ಕತೆಯಾದ ‘ಕೋಟಿ’ ಗೆಲ್ಲುವ ಭರವಸೆಯಾಗಿ ಕಂಡಿದೆ.

ಇದನ್ನೂ ಓದಿ: Swara Bhasker: ತೂಕ ಹೆಚ್ಚಾಗಿದ್ದರಿಂದ ಸಿನಿಮಾಗಳಲ್ಲಿ ಕೆಲಸ ಸಿಗುತ್ತಿಲ್ಲ; ಬಾಡಿ ಶೇಮ್‌ ಮಾಡಿದಕ್ಕೆ ಸ್ವರಾ ಭಾಸ್ಕರ್ ಗರಂ!

ಕೋಟಿ ಚಿತ್ರದ ತಾರಾಗಣದಲ್ಲಿ ಡಾಲಿ ಧನಂಜಯ ಜೊತೆ ನಾಯಕಿಯಾಗಿ ಮೋಕ್ಷಾ ಕುಶಾಲ್‌ ಮತ್ತು ಖಳನಾಯಕನಾಗಿ ರಮೇಶ್ ಇಂದಿರಾ ಇದ್ದಾರೆ. ಉಳಿದಂತೆ ಹಿರಿಯ ನಟರಾದ ರಂಗಾಯಣ ರಘು, ತಾರಾ, ಸರ್ದಾರ್‌ ಸತ್ಯ ಜತೆಗೆ ಪೃಥ್ವಿ ಶಾಮನೂರು, ತನುಜಾ ವೆಂಕಟೇಶ್, ಅಭಿಷೇಕ್ ಶ್ರೀಕಾಂತ್, ವಿಜಯ್ ಶೋಭರಾಜ್ ಪವೂರ್ ಮುಂತಾದವರು ಅಭಿನಯಿಸಿದ್ದಾರೆ.

ಚಿತ್ರದಲ್ಲಿ ಐದು ಹಾಡುಗಳಿದ್ದು ವಾಸುಕಿ ವೈಭವ್‌ ರಾಗ ಸಂಯೋಜಿಸಿದ್ದಾರೆ. ಈ ಹಾಡುಗಳಿಗೆ ಯೋಗರಾಜ್‌ ಭಟ್‌ ಮತ್ತು ವಾಸುಕಿ ವೈಭವ್‌ ಸಾಹಿತ್ಯ ರಚಿಸಿದ್ದಾರೆ. ಹಿನ್ನೆಲೆ ಸಂಗೀತದ ಜವಾಬ್ದಾರಿಯನ್ನು 777 ಚಾರ್ಲಿ ಖ್ಯಾತಿಯ ನೊಬಿನ್‌ ಪೌಲ್‌ ಹೊತ್ತಿದ್ದಾರೆ. ಕಾಂತಾರ ಸಿನಿಮಾದ ಕೆಲಸಕ್ಕೆ ಪ್ರಶಂಸೆಗಳಿಸಿದ್ದ ಪ್ರತೀಕ್‌ ಶೆಟ್ಟಿಯವರು‌ ಕೋಟಿಯ ಸಂಕಲನಕಾರರಾದರೆ, ಟೆಲಿವಿಷನ್‌ನ ಖ್ಯಾತ ಛಾಯಾಗ್ರಾಹಕ ಅರುಣ್ ಅವರು ಈ ಸಿನಿಮಾದ ಕ್ಯಾಮರಮನ್.

ಈ ಸಿನೆಮಾವನ್ನು ಜಿಯೋ ಸ್ಟುಡಿಯೋಸ್ ನಿರ್ಮಾಣ ಮಾಡಿದ್ದು, ಕಲರ್ಸ್ ಕನ್ನಡವನ್ನು ದಶಕಗಳ ಕಾಲ ಮುನ್ನಡೆಸಿದ್ದ ಪರಮ್‌ ಅವರು ಬರೆದು ನಿರ್ದೇಶಿಸಿದ್ದಾರೆ. ʼಕೋಟಿʼ ಜೂನ್‌ 14ರಂದು ಚಿತ್ರಮಂದಿರಗಳಲ್ಲಿ ಬಿಡುಗಡೆಯಾಗಲಿದೆ.

Continue Reading

ಸ್ಯಾಂಡಲ್ ವುಡ್

Niveditha Gowda: ಮಗು ವಿಚಾರಕ್ಕೆ ಮುನಿಸು; ಒಂದೇ ಕಾರಲ್ಲಿ ಬಂದು ಡಿವೋರ್ಸ್‌ ಅರ್ಜಿ ಸಲ್ಲಿಸಿದ ಚಂದನ್‌-ನಿವೇದಿತಾ!

Niveditha Gowda: ನಟಿ ನಿವೇದಿತಾ ಗೌಡ (Niveditha Gowda) ಹಾಗೂ ಸಂಗೀತ ನಿರ್ದೇಶಕ ಚಂದನ್​ ಶೆಟ್ಟಿ ಆಗಾಗ ತಮ್ಮ ಪೋಸ್ಟ್‌ ಹಾಗೂ ರೀಲ್ಸ್‌ ಮೂಲಕ ಸುದ್ದಿಯಾಗುತ್ತಲೇ ಇರುತ್ತಿದ್ದರು. ಹಿಂದೊಮ್ಮೆ ಅಂಡರ್​ ವಾಟರ್​ ಶೂಟ್​ ಮಾಡಿರುವ ಜೋಡಿ ಲಿಪ್‌ ಕಿಸ್‌ ಮಾಡಿದ ರೊಮ್ಯಾಂಟಿಕ್​ ವಿಡಿಯೊ ಶೇರ್‌ ಮಾಡಿಕೊಂಡಿತ್ತು. ಸಾವಿರಾರು ಜನರು ಲೈಕ್​ ಮಾಡಿದ್ದರು. ಕೆಲವರು ಈ ವಿಡಿಯೊಗೆ ಮೆಚ್ಚುಗೆ ಸೂಚಿಸಿದರೆ ಇನ್ನು ಕೆಲವರು ನೆಗೆಟಿವ್​ ಕಮೆಂಟ್​ ಕೂಡ ಮಾಡಿದ್ದರು.

VISTARANEWS.COM


on

Chandan Shetty divorce main Reason children
Koo

ಬೆಂಗಳೂರು: ರ್‍ಯಾಪರ್‌ ಚಂದನ್ ಶೆಟ್ಟಿ (Chandan Shetty) ಮತ್ತು ನಿವೇದಿತಾ ಗೌಡ ದಾಂಪತ್ಯದಲ್ಲಿ ಬಿರುಕು ಉಂಟಾಗಿದ್ದು, ವಿಚ್ಛೇದನ ಕೋರಿ ಬೆಂಗಳೂರು ಕೌಟುಂಬಿಕ ನ್ಯಾಯಾಲಯಕ್ಕೆ ಅರ್ಜಿ ಸಲ್ಲಿಸಿದ್ದಾರೆ. ಒಂದೇ ಕಾರಿನಲ್ಲಿ ಇಬ್ಬರೂ ಒಟ್ಟಿಗೆ ಬಂದು ಅರ್ಜಿ ಸಲ್ಲಿಸಿ ಖುಷಿಯಾಗಿಯೇ ವಾಪಸ್‌ ಹೊರಟ್ಟಿದ್ದಾರೆ. ಮಗು ವಿಚಾರಕ್ಕೆ ಸಂಬಂಧ ಪಟ್ಟಂತೆ ಡಿವೋರ್ಸ್‌ಗೆ ಮುಂದಾಗಿದೆ ಈ ದಂಪತಿ. ಮಗು ಈಗಲೇ ಬೇಡ ಎಂದು ನಿವೇದಿತಾ ಕೌಟುಂಬಿಕ ನ್ಯಾಯಾಲಯದ ಮಧ್ಯಸ್ಥಿಕೆ ಸಂದರ್ಭದಲ್ಲಿ ಹೇಳಿದ್ದಾರೆ.

ಫ್ಯಾಮಿಲಿ ಕೋರ್ಟ್‌ನಲ್ಲಿ ಜೂನ್ 6ರಂದು ಅರ್ಜಿ ಸಲ್ಲಿಸಿದ್ದರು. ಪರಸ್ಪರ ಒಪ್ಪಿಗೆ ಮೇರೆಗೆ ವಿಚ್ಛೇದನ ಅರ್ಜಿ ಸಲ್ಲಿಸಿದ್ದರು. ಮಿಡಿಯೆಟರ್ ಸಂಧಾನಕ್ಕೆ ಕೊನೆಗೂ ದಂಪತಿ ಒಪ್ಪಿಲ್ಲ. ಡಿವೋರ್ಸ್‌ ಪಡೆದುಕೊಂಡರೂ ಜೀವನಾಂಶ ಬೇಡ ಎಂದಿದ್ದಾರೆ ನಿವೇದಿತಾ. ಡಿವೋರ್ಸ್ ಸಿಕ್ಕ ನಂತರ ನಿವೇದಿತಾ ವಿದೇಶಕ್ಕೆ ಹೋಗುವ ಸಾಧ್ಯತೆ ಇದೆ ಎನ್ನಲಾಗಿದೆ.

ಚಂದನ್​ ಹಾಗೂ ನಿವೇದಿತಾ ವಿಚ್ಛೇದನ ಅರ್ಜಿ (ಕೇಸ್ ನಂಬರ್-Mc 3388-/2024) ಕೋರ್ಟ್​ ಮುಂದಕ್ಕೆ ಬಂದಿತ್ತು. ಕೌಟುಂಬಿಕ ನ್ಯಾಯಾಲಯದ ನ್ಯಾಯಾಧೀಶರಾದ ಕೆ.ಎಸ್ ಜ್ಯೋತಿ ಶ್ರೀ ಅವರು ಬೆಂಚ್​ ಮುಂದೆ ಈ ಪ್ರಕರಣ ಬಂದಿತ್ತು. ಅರ್ಜಿಯನ್ನು ವಿಚಾರಣೆ ಮಾಡುವ ಮೊದಲು ಕಾನೂನು ಪ್ರಕ್ರಿಯೆಯಂತೆ ಮಿಡಿಯೇಷನ್ ಪ್ರಕ್ರಿಯೆ ಒಳಪಡಬೇಕಾಯಿತು.ಮೀಡಿಯೇಷನ್ ಸೆಂಟರ್​ನಲ್ಲಿ ವಿಚ್ಛೇದನ ನೀಡದಂತೆ ಸಲಹೆ ಕೊಡುತ್ತಾರೆ. ಪರಸ್ಪರ ಒಂದಾಗಿ ಬಾಳಿ ಎಂದು ಸಲಹೆ ನೀಡುತ್ತಾರೆ. ಇಬ್ಬರು ಒಪ್ಪದೇ ಇದ್ದರೆ ನ್ಯಾಯಾಧೀಶರ ಮುಂದೆ ಹಾಜರು ಪಡಿಸುತ್ತಾರೆ. ಬಳಿಕ ನ್ಯಾಯಾಧೀಶರು ನಿರ್ಧಾರದ ಬಗ್ಗೆ ಕೇಳುತ್ತಾರೆ. ಬಳಿಕ ವಿಚ್ಛೇದನಕ್ಕೆ ಒಪ್ಪಿಗೆ ಕೊಡುತ್ತಾರೆ.

ಇದನ್ನೂ ಓದಿ: Niveditha Gowda : ಬೇಡ ನಾವು ಜತೆಯಾಗಿ ಇರಲ್ಲ; ಸಂಧಾನಕ್ಕೆ ಒಪ್ಪದ ಚಂದನ್​- ನಿವೇದಿತಾ

ಜೋಡಿ ಒಟ್ಟಿಗೆ ರೀಲ್ಸ್‌ ಮಾಡಿ ಸಾಕಷ್ಟು ಕ್ರೇಜ್‌ ಪಡೆದುಕೊಂಡಿತ್ತು. ಇತ್ತೀಚೆಗೆ ನಿವೇದಿತಾ ಒಬ್ಬರೇ ರೀಲ್ಸ್‌ ಶೇರ್‌ ಮಾಡಿಕೊಳ್ಳುತ್ತಿದ್ದರು. ಹೀಗಾಗಿ ಅವರ ಫ್ಯಾನ್ಸ್‌ ಜೋಡಿ ಬೇರೆಯಾಗಿದೆ ಎಂದು ಕಮೆಂಟ್‌ ಮಾಡುತ್ತಿದ್ದರು.

ಯುವ ದಸರಾ ಕಾರ್ಯಕ್ರಮದಲ್ಲಿ ಚಂದನ್‌ ಶೆಟ್ಟಿ ಅವರು ನಿವೇದಿತಾ ಗೌಡ ಪ್ರಪೋಸ್‌ ಮಾಡಿದ್ದೂ ವಿವಾದಕ್ಕೆ ಕಾರಣವಾಗಿತ್ತು. ಸಾಕಷ್ಟು ಮಂದಿ ಇದಕ್ಕೆ ಟೀಕೆ ವ್ಯಕ್ತಪಡಿಸಿದ್ದರು. ಬಿಗ್‌ ಬಾಸ್‌ ಐದನೇ ಸೀಸನ್‌ನಲ್ಲಿ ಚಂದನ್‌ ಗೌಡ ಹಾಗೂ ನಿವೇದಿತಾ ಗೌಡ ಮೊದಲ ಬಾರಿಗೆ ಭೇಟಿಯಾಗಿದ್ದರು. ಮೊದಲಿಗೆ ಬಿಗ್‌ಬಾಸ್‌ನಲ್ಲಿ ನಿವೇದಿತಾಳನ್ನು ತನ್ನ ತಂಗಿ ಎಂದೇ ಹೇಳುತ್ತಿದ್ದ ಚಂದನ್‌ ಗೌಡ ಬಳಿಕ ಮದುವೆಯಾಗಿದ್ದರು.

ಇದೇ ವರ್ಷ ಮೇ 12ರಂದು ನಿವೇದಿತಾ ಹುಟ್ಟುಹಬ್ಬಕ್ಕೆ ವಿಶ್ ಮಾಡಿದ್ದರು ಚಂದನ್‌. ಆರು ದಿನಗಳ ಹಿಂದೆಯಷ್ಟೇ ʻಕೋಟಿʼ ಸಿನಿಮಾ ಪ್ರಚಾರಕ್ಕೂ ಒಟ್ಟಿಗೆ ಕಾಣಿಸಿಕೊಂಡಿದ್ದರು. ಇದೀಗ ಇಬ್ಬರೂ ಬೇರೆಯಾಗಿದ್ದಾರೆ. ಇದೀಗ ಜೋಡಿಯ ಫ್ಯಾನ್ಸ್‌ ಕಮೆಂಟ್‌ ಮೂಲಕ ಬೇಸರ ಹೊರ ಹಾಕಿದ್ದಾರೆ.

ಟ್ರೋಲಿಗರ ಕೆಂಗಣ್ಣಿಗೆ ಗುರಿಯಾಗಿದ್ದ ಜೋಡಿ!

ನಟಿ ನಿವೇದಿತಾ ಗೌಡ (Niveditha Gowda) ಹಾಗೂ ಸಂಗೀತ ನಿರ್ದೇಶಕ ಚಂದನ್​ ಶೆಟ್ಟಿ ಆಗಾಗ ತಮ್ಮ ಪೋಸ್ಟ್‌ ಹಾಗೂ ರೀಲ್ಸ್‌ ಮೂಲಕ ಸುದ್ದಿಯಾಗುತ್ತಲೇ ಇರುತ್ತಿದ್ದರು. ಹಿಂದೊಮ್ಮೆ ಅಂಡರ್​ ವಾಟರ್​ ಶೂಟ್​ ಮಾಡಿರುವ ಜೋಡಿ ಲಿಪ್‌ ಕಿಸ್‌ ಮಾಡಿದ ರೊಮ್ಯಾಂಟಿಕ್​ ವಿಡಿಯೊ ಶೇರ್‌ ಮಾಡಿಕೊಂಡಿತ್ತು. ಸಾವಿರಾರು ಜನರು ಲೈಕ್​ ಮಾಡಿದ್ದರು. ಕೆಲವರು ಈ ವಿಡಿಯೊಗೆ ಮೆಚ್ಚುಗೆ ಸೂಚಿಸಿದರೆ ಇನ್ನು ಕೆಲವರು ನೆಗೆಟಿವ್​ ಕಮೆಂಟ್​ ಕೂಡ ಮಾಡಿದ್ದರು.

ಬಿಗ್​ ಬಾಸ್​ ಕನ್ನಡ ಸೀಸನ್​ 5’ ರಿಯಾಲಿಟಿ ಶೋನಲ್ಲಿ ನಿವೇದಿತಾ ಗೌಡ ಹಾಗೂ ಚಂದನ್​ ಶೆಟ್ಟಿ ಅವರು ಸ್ಪರ್ಧಿಸಿದ್ದರು. ಅಲ್ಲಿಯೇ ಅವರಿಗೆ ಮೊದಲ ಬಾರಿಗೆ ಪರಿಚಯ ಆಗಿದ್ದು. 2020ರ ಫೆಬ್ರವರಿಯಲ್ಲಿ ಹಸೆಮಣೆ ಏರಿದರು. ಗಾಯಕ ಸಂಗೀತ ನಿರ್ದೇಶಕನಾಗಿ ಗುರುತಿಸಿಕೊಂಡಿದ್ದ ಚಂದನ್​ ಶೆಟ್ಟಿ ಅವರು ಸಿನಿಮಾದಲ್ಲಿಯೂ ನಟಿಸಿದ್ದಾರೆ. ಚಂದನ್ ಶೆಟ್ಟಿ ಅವರ ಮೊದಲ ಸಿನಿಮಾದ ಶೀರ್ಷಿಕೆ ‘ಎಲ್ರ ಕಾಲೆಳೆಯುತ್ತೆ ಕಾಲ’.

Continue Reading

ಸ್ಯಾಂಡಲ್ ವುಡ್

Chandan Shetty: ತಂಗಿ ತಂಗಿ ಎಂದೇ ಮದುವೆಯಾಗಿದ್ದ ಚಂದನ್‌! ಇವರ ಬಾಳಲ್ಲಿ ವಿಲನ್‌ ಆಗಿದ್ದು ಯಾರು?

Chandan Shetty: ಯುವ ದಸರಾ ಕಾರ್ಯಕ್ರಮದಲ್ಲಿ ಚಂದನ್‌ ಶೆಟ್ಟಿ ಅವರು ನಿವೇದಿತಾ ಗೌಡ ಪ್ರಪೋಸ್‌ ಮಾಡಿದ್ದೂ ವಿವಾದಕ್ಕೆ ಕಾರಣವಾಗಿತ್ತು. ಸಾಕಷ್ಟು ಮಂದಿ ಇದಕ್ಕೆ ಟೀಕೆ ವ್ಯಕ್ತಪಡಿಸಿದ್ದರು. ಬಿಗ್‌ ಬಾಸ್‌ ಐದನೇ ಸೀಸನ್‌ನಲ್ಲಿ ಚಂದನ್‌ ಗೌಡ ಹಾಗೂ ನಿವೇದಿತಾ ಗೌಡ ಮೊದಲ ಬಾರಿಗೆ ಭೇಟಿಯಾಗಿದ್ದರು. ಮೊದಲಿಗೆ ಬಿಗ್‌ಬಾಸ್‌ನಲ್ಲಿ ನಿವೇದಿತಾಳನ್ನು ತನ್ನ ತಂಗಿ ಎಂದೇ ಹೇಳುತ್ತಿದ್ದ ಚಂದನ್‌ ಗೌಡ ಬಳಿಕ ಮದುವೆಯಾಗಿದ್ದರು.

VISTARANEWS.COM


on

Chandan Shetty divorce main reason social nedia craze
Koo

ಬೆಂಗಳೂರು: ರ್‍ಯಾಪರ್‌ ಚಂದನ್ ಶೆಟ್ಟಿ (Chandan Shetty) ಮತ್ತು ನಿವೇದಿತಾ ಗೌಡ ದಾಂಪತ್ಯದಲ್ಲಿ ಬಿರುಕು ಉಂಟಾಗಿದ್ದು, ವಿಚ್ಛೇದನ ಕೋರಿ ಬೆಂಗಳೂರು ಕೌಟುಂಬಿಕ ನ್ಯಾಯಾಲಯಕ್ಕೆ ಅರ್ಜಿ ಸಲ್ಲಿಸಿದ್ದಾರೆ

.ಪರಸ್ಪರ ಒಪ್ಪಿಗೆ ಮೇರೆಗೆ ಕಿರುತೆರೆ ದಂಪತಿ ಚಂದನ್ ಶೆಟ್ಟಿ ನಿವೇದಿತಾ ಗೌಡ ವಿಚ್ಛೇದನ ಕೋರಿ ಬೆಂಗಳೂರಿನ ಫ್ಯಾಮಿಲಿ ಕೋರ್ಟ್‌ಗೆ ಅರ್ಜಿ ಸಲ್ಲಿಸಿದ್ದಾರೆ ಎನ್ನಲಾಗಿದೆ. ಇನ್ನು ಚೆಂದವಾಗಿದ್ದ ಜೋಡಿ ಬೇರೆಯಾಗಲು ಕಾರಣ ನಿವೇದಿತಾ ಅವರಿಗಿದ್ದ ಸೋಷಿಯಲ್‌ ಮೀಡಿಯಾ ಕ್ರೇಜ್‌ ಎಂದು ಹೇಳಲಾಗುತ್ತಿದೆ. ಸೋಷಿಯಲ್‌ ಮೀಡಿಯಾವೇ ಇಬ್ಬರ ಬದುಕಿನಲ್ಲಿ ವಿಲನ್‌ ಆಗಿದೆ ಎಂಬ ಮಾತುಗಳು ಕೇಳಿ ಬರುತ್ತಿವೆ.

ಜೋಡಿ ಒಟ್ಟಿಗೆ ರೀಲ್ಸ್‌ ಮಾಡಿ ಸಾಕಷ್ಟು ಕ್ರೇಜ್‌ ಪಡೆದುಕೊಂಡಿತ್ತು. ಇತ್ತೀಚೆಗೆ ನಿವೇದಿತಾ ಒಬ್ಬರೇ ರೀಲ್ಸ್‌ ಶೇರ್‌ ಮಾಡಿಕೊಳ್ಳುತ್ತಿದ್ದರು. ಹೀಗಾಗಿ ಅವರ ಫ್ಯಾನ್ಸ್‌ ಜೋಡಿ ಬೇರೆಯಾಗಿದೆ ಎಂದು ಕಮೆಂಟ್‌ ಮಾಡುತ್ತಿದ್ದರು.

ಯುವ ದಸರಾ ಕಾರ್ಯಕ್ರಮದಲ್ಲಿ ಚಂದನ್‌ ಶೆಟ್ಟಿ ಅವರು ನಿವೇದಿತಾ ಗೌಡ ಪ್ರಪೋಸ್‌ ಮಾಡಿದ್ದೂ ವಿವಾದಕ್ಕೆ ಕಾರಣವಾಗಿತ್ತು. ಸಾಕಷ್ಟು ಮಂದಿ ಇದಕ್ಕೆ ಟೀಕೆ ವ್ಯಕ್ತಪಡಿಸಿದ್ದರು. ಬಿಗ್‌ ಬಾಸ್‌ ಐದನೇ ಸೀಸನ್‌ನಲ್ಲಿ ಚಂದನ್‌ ಗೌಡ ಹಾಗೂ ನಿವೇದಿತಾ ಗೌಡ ಮೊದಲ ಬಾರಿಗೆ ಭೇಟಿಯಾಗಿದ್ದರು. ಮೊದಲಿಗೆ ಬಿಗ್‌ಬಾಸ್‌ನಲ್ಲಿ ನಿವೇದಿತಾಳನ್ನು ತನ್ನ ತಂಗಿ ಎಂದೇ ಹೇಳುತ್ತಿದ್ದ ಚಂದನ್‌ ಗೌಡ ಬಳಿಕ ಮದುವೆಯಾಗಿದ್ದರು.

ಇದೇ ವರ್ಷ ಮೇ 12 ರಂದು ನಿವೇದಿತಾ ಹುಟ್ಟುಹಬ್ಬಕ್ಕೆ ವಿಶ್ ಮಾಡಿದ್ದರು ಚಂದನ್‌. ಆರು ದಿನಗಳ ಹಿಂದೆಯಷ್ಟೇ ʻಕೋಟಿʼ ಸಿನಿಮಾ ಪ್ರಚಾರಕ್ಕೂ ಒಟ್ಟಿಗೆ ಕಾಣಿಸಿಕೊಂಡಿದ್ದರು. ಇದೀಗ ಇಬ್ಬರೂ ಬೇರೆಯಾಗಿದ್ದಾರೆ. ಇದೀಗ ಜೋಡಿಯ ಫ್ಯಾನ್ಸ್‌ ಕಮೆಂಟ್‌ ಮೂಲಕ ಬೇಸರ ಹೊರ ಹಾಕಿದ್ದಾರೆ.

ಟ್ರೋಲಿಗರ ಕೆಂಗಣ್ಣಿಗೆ ಗುರಿಯಾಗಿದ್ದ ಜೋಡಿ!

ನಟಿ ನಿವೇದಿತಾ ಗೌಡ (Niveditha Gowda) ಹಾಗೂ ಸಂಗೀತ ನಿರ್ದೇಶಕ ಚಂದನ್​ ಶೆಟ್ಟಿ ಆಗಾಗ ತಮ್ಮ ಪೋಸ್ಟ್‌ ಹಾಗೂ ರೀಲ್ಸ್‌ ಮೂಲಕ ಸುದ್ದಿಯಾಗುತ್ತಲೇ ಇರುತ್ತಿದ್ದರು. ಹಿಂದೊಮ್ಮೆ ಅಂಡರ್​ ವಾಟರ್​ ಶೂಟ್​ ಮಾಡಿರುವ ಜೋಡಿ ಲಿಪ್‌ ಕಿಸ್‌ ಮಾಡಿದ ರೊಮ್ಯಾಂಟಿಕ್​ ವಿಡಿಯೊ ಶೇರ್‌ ಮಾಡಿಕೊಂಡಿತ್ತು. ಸಾವಿರಾರು ಜನರು ಲೈಕ್​ ಮಾಡಿದ್ದರು. ಕೆಲವರು ಈ ವಿಡಿಯೊಗೆ ಮೆಚ್ಚುಗೆ ಸೂಚಿಸಿದರೆ ಇನ್ನು ಕೆಲವರು ನೆಗೆಟಿವ್​ ಕಮೆಂಟ್​ ಕೂಡ ಮಾಡಿದ್ದರು.

ಬಿಗ್​ ಬಾಸ್​ ಕನ್ನಡ ಸೀಸನ್​ 5’ ರಿಯಾಲಿಟಿ ಶೋನಲ್ಲಿ ನಿವೇದಿತಾ ಗೌಡ ಹಾಗೂ ಚಂದನ್​ ಶೆಟ್ಟಿ ಅವರು ಸ್ಪರ್ಧಿಸಿದ್ದರು. ಅಲ್ಲಿಯೇ ಅವರಿಗೆ ಮೊದಲ ಬಾರಿಗೆ ಪರಿಚಯ ಆಗಿದ್ದು. 2020ರ ಫೆಬ್ರವರಿಯಲ್ಲಿ ಹಸೆಮಣೆ ಏರಿದರು. ಗಾಯಕ ಸಂಗೀತ ನಿರ್ದೇಶಕನಾಗಿ ಗುರುತಿಸಿಕೊಂಡಿದ್ದ ಚಂದನ್​ ಶೆಟ್ಟಿ ಅವರು ಸಿನಿಮಾದಲ್ಲಿಯೂ ನಟಿಸಿದ್ದಾರೆ. ಚಂದನ್ ಶೆಟ್ಟಿ ಅವರ ಮೊದಲ ಸಿನಿಮಾದ ಶೀರ್ಷಿಕೆ ‘ಎಲ್ರ ಕಾಲೆಳೆಯುತ್ತೆ ಕಾಲ’.

Continue Reading

ಸ್ಯಾಂಡಲ್ ವುಡ್

Niveditha Gowda: ನಿವೇದಿತಾ- ಚಂದನ್‌ ದಾಂಪತ್ಯದಲ್ಲಿ ಬಿರುಕು? ಡಿವೋರ್ಸ್‌ ಕೊಟ್ರಾ ಬಾರ್ಬಿ ಡಾಲ್‌?

Niveditha Gowda: ಬಿಗ್​ ಬಾಸ್​ ಕನ್ನಡ ಸೀಸನ್​ 5’ ರಿಯಾಲಿಟಿ ಶೋನಲ್ಲಿ ನಿವೇದಿತಾ ಗೌಡ ಹಾಗೂ ಚಂದನ್​ ಶೆಟ್ಟಿ ಅವರು ಸ್ಪರ್ಧಿಸಿದ್ದರು. ಅಲ್ಲಿಯೇ ಅವರಿಗೆ ಮೊದಲ ಬಾರಿಗೆ ಪರಿಚಯ ಆಗಿದ್ದು. 2020ರ ಫೆಬ್ರವರಿಯಲ್ಲಿ ಹಸೆಮಣೆ ಏರಿದರು. ಇಬ್ಬರೂ ಕೂಡ ಸೋಷಿಯಲ್​ ಮೀಡಿಯಾದಲ್ಲಿ ಆ್ಯಕ್ಟೀವ್​ ಆಗಿದ್ದಾರೆ.

VISTARANEWS.COM


on

Niveditha Gowda chandan shetty divorce
Koo

ಕಿರುತೆರೆ ಬಾರ್ಬಿ ಡಾಲ್‌ ಖ್ಯಾತಿಯ ನಿವೇದಿತಾ ಗೌಡ (Niveditha Gowda) ಹಾಗೂ ಗಾಯಕ ಚಂದನ್‌ ಶೆಟ್ಟಿ ದಂಪತಿ ಡಿವೋರ್ಸ್‌ ಪಡೆದುಕೊಂಡಿದೆ ಎಂದು ವರದಿಯಾಗಿದೆ. ಈ ಬಗ್ಗೆ ದಂಪತಿ ಇನ್ನೂ ಸ್ಪಷ್ಟನೆ ಕೊಟ್ಟಿಲ್ಲ. ಕರಿಯರ್ ದೃಷ್ಟಿಯಿಂದ ಪರಸ್ಪರ ಒಪ್ಪಿಗೆ ಮೂಲಕ ವಿಚ್ಛೇದನ ಪಡೆದುಕೊಳ್ಲುತ್ತಿದ್ದಾರೆ ಎನ್ನಲಾಗಿದೆ. ಇಂದು ಶಾಂತಿನಗರ ಕೋರ್ಟ್ ನಲ್ಲಿ ದಂಪತಿ ವಿಚ್ಛೇದನ ಪಡೆದುಕೊಳ್ಳಲಿದ್ದಾರೆ ಎನ್ನಲಾಗಿದೆ.

ಬಿಗ್​ ಬಾಸ್​ ಕನ್ನಡ ಸೀಸನ್​ 5’ ರಿಯಾಲಿಟಿ ಶೋನಲ್ಲಿ ನಿವೇದಿತಾ ಗೌಡ ಹಾಗೂ ಚಂದನ್​ ಶೆಟ್ಟಿ ಅವರು ಸ್ಪರ್ಧಿಸಿದ್ದರು. ಅಲ್ಲಿಯೇ ಅವರಿಗೆ ಮೊದಲ ಬಾರಿಗೆ ಪರಿಚಯ ಆಗಿದ್ದು.2020ರ ಫೆಬ್ರವರಿಯಲ್ಲಿ ಹಸೆಮಣೆ ಏರಿದ್ದರು.

ಚಂದನ್ ಶೆಟ್ಟಿ ಹಾಗೂ ಪತ್ನಿ ನಿವೇದಿತಾ ಗೌಡ ಆಗಾಗ ಒಟ್ಟಿಗೆ ರೀಲ್ಸ್‌ ಶೇರ್‌ ಮಾಡಿಕೊಳ್ಳುತ್ತಿದ್ದರು.

ಕೆಲವು ರೀಲ್ಸ್‌ಗಳನ್ನು ನೋಡಿ ನೆಟ್ಟಿಗರು ಗರಂ ಆಗುತ್ತಿದ್ದರು. ನೆಟ್ಟಿಗರು ಕಮೆಂಟ್‌ ಮಾಡಿ ʻʻಗಂಡ-ಹೆಂಡತಿ ನಡುವಿನ ರೊಮ್ಯಾನ್ಸ್​ ಖಾಸಗಿಯಾಗಿ ಇರಬೇಕು, ಇದನ್ನೆಲ್ಲ ಸಾರ್ವಜನಿಕವಾಗಿ ಪ್ರದರ್ಶಿಸುವ ಅಗತ್ಯವಿಲ್ಲʼʼ ಎಂದು ಟೀಕೆ ಮಾಡುತ್ತಿದ್ದರು.

Continue Reading
Advertisement
Lok Sabha Election 2024
ರಾಜಕೀಯ5 mins ago

Lok Sabha Election 2024: ಈ ಬಾರಿ 74 ಮಹಿಳಾ ಸಂಸದರು, ಯಾವ ಪಕ್ಷದಲ್ಲಿ ಎಷ್ಟು ಮಂದಿ?

Kotee Movie Kannada Team Gives First Ticket To Kichcha Sudeep
ಸ್ಯಾಂಡಲ್ ವುಡ್8 mins ago

Kotee Movie Kannada: ಕಿಚ್ಚ ಸುದೀಪ್​ಗೆ ‘ಕೋಟಿ’ ಸಿನಿಮಾದ ಮೊದಲ ಟಿಕೆಟ್​!

Viral Video
ವೈರಲ್ ನ್ಯೂಸ್16 mins ago

Viral Video: ಮೆಟ್ರೊ ರೈಲಿನೊಳಗೆ ʼವಿದ್ಯಾವಂತ ಮಹಿಳೆಯರʼ ಫೈಟ್‌ ಹೇಗಿದೆ ನೋಡಿ!

crime news
ಕರ್ನಾಟಕ27 mins ago

ಸಂಬಂಧ ಕಡಿಯಲು ಸೆಂಟಿಮೆಂಟ್ ಬೇಕಿಲ್ಲ, ಕ್ಷುಲ್ಲಕ ಕಾರಣ ಸಾಕು; ಪತಿಯ ಪೊಸೇಸೀವ್‌ನೆಸ್‌ಗೆ ಬೇಸತ್ತ ಪತ್ನಿ ಪರಾರಿ

Viral Video
ವೈರಲ್ ನ್ಯೂಸ್34 mins ago

Viral Video: ಗ್ರಹಚಾರ ಕೆಟ್ಟಾಗ ಕಾರಿನ ಚಕ್ರ ಕಳಚಿ ತಲೆಗೆ ಅಪ್ಪಳಿಸಬಹುದು! ವಿಡಿಯೊ ನೋಡಿ

Ramoji Rao passed away
ದೇಶ44 mins ago

Ramoji Rao passed away: ಮಾಧ್ಯಮ ಲೋಕದ ದಿಗ್ಗಜ ಇನ್ನಿಲ್ಲ; ರಾಮೋಜಿ ರಾವ್ ವಿಧಿವಶ

Vastu Tips
ಧಾರ್ಮಿಕ1 hour ago

Vastu Tips: ಮನೆಯ ಗೋಡೆಗಳ ಮೇಲೆ ಎಲ್ಲೆಂದರಲ್ಲಿ ಫೋಟೊ ಅಳವಡಿಸಿದರೆ ಏನಾಗುತ್ತದೆ?

Monsoon Tour
ದೇಶ1 hour ago

Monsoon Tour: ಮಳೆಗಾಲದ ಪ್ರವಾಸಕ್ಕೆ ಸೂಕ್ತ ಬೆಂಗಳೂರು ಸಮೀಪದ ಈ 8 ಅದ್ಭುತ ಸ್ಥಳಗಳು

Karnataka Weather Forecast
ಮಳೆ2 hours ago

Karnataka Weather : ರಾಜ್ಯಾದ್ಯಂತ ಮುಂದುವರಿದ ಮಳೆ; 19 ಜಿಲ್ಲೆಗಳಿಗೆ ಯೆಲ್ಲೋ, ಆರೆಂಜ್‌ ಅಲರ್ಟ್‌

Rishabh Pant
ಪ್ರಮುಖ ಸುದ್ದಿ3 hours ago

Rishabh Pant : ಸಂಜು ಸ್ಯಾಮ್ಸನ್​ ಜತೆಗಿನ ಒಳ ಜಗಳದ ಬಗ್ಗೆ ಸ್ಪಷ್ಟನೆ ನೀಡಿದ ರಿಷಭ್ ಪಂತ್​

Sharmitha Gowda in bikini
ಕಿರುತೆರೆ8 months ago

Geetha Serial Kannada: ನಿದ್ದೆ ಕದ್ದ ಚೋರಿ! ನಟಿ `ಭಾನುಮತಿ’ ಹಾಟ್‌ ಪೋಟೊಗಳಿಗೆ ಫ್ಯಾನ್ಸ್ ಫುಲ್ ಫಿದಾ

Kannada Serials
ಕಿರುತೆರೆ8 months ago

Kannada Serials TRP: 2ನೇ ಸ್ಥಾನದಲ್ಲಿ 2 ಧಾರಾವಾಹಿಗಳು; ಟಿಆರ್‌ಪಿ ರೇಸ್‌ನಲ್ಲಿಲ್ಲ ಭಾಗ್ಯಲಕ್ಷ್ಮೀ!

Bigg Boss- Saregamapa 20 average TRP
ಕಿರುತೆರೆ8 months ago

Kannada Serials TRP: ಏಳನೇ ಸ್ಥಾನಕ್ಕೆ ʻಅಮೃತಧಾರೆʼ ಕುಸಿತ; ಬಿಗ್‌ ಬಾಸ್‌-ಸರಿಗಮಪ ಟಿಆರ್‌ಪಿ ಎಷ್ಟು?

galipata neetu
ಕಿರುತೆರೆ6 months ago

Kanyadana Serial: ಕಿರುತೆರೆಗೆ ಮತ್ತೆ ಎಂಟ್ರಿ ಕೊಟ್ಟ ʻಗಾಳಿಪಟʼ ಖ್ಯಾತಿಯ ʻನೀತುʼ!

Kannada Serials
ಕಿರುತೆರೆ8 months ago

Kannada Serials TRP: ನಾಲ್ಕನೇ ಸ್ಥಾನಕ್ಕೆ ಕುಸಿತ ಕಂಡ ʻಸೀತಾ ರಾಮʼ; ಟಿಆರ್‌ಪಿ ರೇಸ್‌ಗೆ ʻಭಾಗ್ಯಲಕ್ಷ್ಮಿʼ ಬ್ಯಾಕ್‌!

Kannada Serials
ಕಿರುತೆರೆ8 months ago

Kannada Serials TRP: ಟಿಆರ್‌ಪಿಯಲ್ಲಿ ʻಭಾಗ್ಯಲಕ್ಷ್ಮೀʼ ಹವಾ; ʻಪುಟ್ಟಕ್ಕನ ಮಕ್ಕಳುʼ ಧಾರಾವಾಹಿಗೆ ಸಂಕಷ್ಟ!

Bigg Boss' dominates TRP; Sita Rama fell to the sixth position
ಕಿರುತೆರೆ7 months ago

Kannada Serials TRP: ಟಿಆರ್‌ಪಿಯಲ್ಲಿ ʻಬಿಗ್ ಬಾಸ್ʼದೇ ಮೇಲುಗೈ; 6ನೇ ಸ್ಥಾನಕ್ಕೆ ಕುಸಿದ ʻಸೀತಾ ರಾಮʼ

geetha serial Dhanush gowda engagement
ಕಿರುತೆರೆ6 months ago

Dhanush Gowda: ಗೀತಾ ಧಾರಾವಾಹಿ ನಟನ ನಿಶ್ಚಿತಾರ್ಥ; ಭವ್ಯಾಳ ಕಮೆಂಟ್‌ ಬಾಕ್ಸ್‌ ಆಫ್‌!

varun
ಕಿರುತೆರೆ7 months ago

Brindavana Serial: ʼಬೃಂದಾವನʼ ಧಾರಾವಾಹಿಯಲ್ಲಿ ದೊಡ್ಡ ಟ್ವಿಸ್ಟ್‌; ಪ್ರಮುಖ ಪಾತ್ರಧಾರಿಯೇ ಬದಲು

Kannada Serials
ಕಿರುತೆರೆ9 months ago

Kannada Serials TRP: ಟಿಆರ್‌ಪಿಯಲ್ಲಿ ಏರಿಕೆ ಕಂಡ ʻಅಮೃತಧಾರೆʼ; ʻಗಟ್ಟಿಮೇಳʼಕ್ಕೆ ನಾಲ್ಕನೇ ಸ್ಥಾನ!

Karnataka weather Forecast
ಮಳೆ13 hours ago

Karnataka weather : ಮಳೆಯಲ್ಲೆ ತಪಸ್ಸಿಗೆ ಕುಳಿತ ವೃದ್ಧ; ಇನ್ನೊಂದು ವಾರ ನಾನ್‌ ಸ್ಟಾಪ್‌ ವರುಣನ ಅಬ್ಬರ

Sigandur launch
ಶಿವಮೊಗ್ಗ15 hours ago

Sigandur launch: ಸಿಗಂದೂರು ಲಾಂಚ್‌ನಲ್ಲಿ ಭಾರಿ ವಾಹನಗಳಿಗೆ ನಿರ್ಬಂಧ

Karnataka Rain
ಮಳೆ2 days ago

Karnataka Rain : ಭಾರಿ ಮಳೆಗೆ ಮರ ಬಿದ್ದು ಮೇಕೆಗಳು ಸಾವು; ಸಿಡಿಲಿಗೆ ಎಲೆಕ್ಟ್ರಿಕ್‌ ಅಂಗಡಿ ಸುಟ್ಟು ಭಸ್ಮ

Lok Sabha Election Result 2024 Live
ದೇಶ4 days ago

Lok Sabha Election Result 2024 Live: ಲೋಕಸಭೆ ಚುನಾವಣೆ ಫಲಿತಾಂಶದ ಲೈವ್‌ ಇಲ್ಲಿ ವೀಕ್ಷಿಸಿ

Karnataka Rain
ಮಳೆ5 days ago

Karnataka Rain : 133 ವರ್ಷದ ರೆಕಾರ್ಡ್ ಬ್ರೇಕ್ ಮಾಡಿದ ʻಬೆಂಗಳೂರು ಮಳೆʼ

Snake Rescue Snakes spotted in heavy rain
ಮಳೆ5 days ago

Snake Rescue: ಮಳೆ ನೀರಿನಲ್ಲಿ ಹರಿದು ಬಂದು ಬೈಕ್‌ನಲ್ಲಿ ಸೇರಿಕೊಂಡ ಹಾವು; ಮನೆಗಳಲ್ಲೂ ಪ್ರತ್ಯಕ್ಷ

Karnataka Rain
ಮಳೆ6 days ago

Karnataka Rain : ವೀಕೆಂಡ್‌ ಮೋಜಿಗೆ ವರುಣ ಅಡ್ಡಿ; ಭಾನುವಾರ ಸಂಜೆಗೆ ಮಳೆ ಕಾಟ

Liquor ban
ಬೆಂಗಳೂರು7 days ago

Liquor Ban : ಮುಂದಿನ ಏಳು ದಿನಗಳಲ್ಲಿ ನಾಲ್ಕೂವರೆ ದಿನ ಬಾರ್ ಕ್ಲೋಸ್; ಎಣ್ಣೆ ಸಿಗೋದು ಯಾವ ದಿನ?

Assault Case in Shivamogga
ಕ್ರೈಂ1 week ago

Assault Case : ಶಿವಮೊಗ್ಗದಲ್ಲಿ ಮತ್ತೆ ಬಾಲ ಬಿಚ್ಚಿದ ಪುಂಡರು; ಗಾಂಜಾ ನಶೆಯಲ್ಲಿ ವಾಹನಗಳು ಪೀಸ್‌ ಪೀಸ್‌

Karnataka weather Forecast
ಮಳೆ2 weeks ago

Karnataka Weather : ಚಿಕ್ಕಮಗಳೂರಲ್ಲಿ ಭಾರಿ ಮಳೆ; ಯಾದಗಿರಿಯಲ್ಲಿ ಕರೆಂಟ್‌ ಕಟ್‌, ಜನರೇಟರ್‌ನಿಂದ ಮೊಬೈಲ್‌ಗಳಿಗೆ ಚಾರ್ಜಿಂಗ್‌!

ಟ್ರೆಂಡಿಂಗ್‌