video viral KSRTC driver misbehaves with women who had come for Goravanahalli Mahalakshmi darshanVideo Viral: ಮಹಾಲಕ್ಷ್ಮಿ ದರ್ಶನಕ್ಕೆ ಬಂದಿದ್ದ ಗೃಹಲಕ್ಷ್ಮಿಯರ ಮೇಲೆ ಬಸ್‌ ಹತ್ತಿಸಿದ ಕೆಎಸ್‌ಆರ್‌ಟಿಸಿ ಡ್ರೈವರ್‌! - Vistara News

ಕರ್ನಾಟಕ

Video Viral: ಮಹಾಲಕ್ಷ್ಮಿ ದರ್ಶನಕ್ಕೆ ಬಂದಿದ್ದ ಗೃಹಲಕ್ಷ್ಮಿಯರ ಮೇಲೆ ಬಸ್‌ ಹತ್ತಿಸಿದ ಕೆಎಸ್‌ಆರ್‌ಟಿಸಿ ಡ್ರೈವರ್‌!

Congress Guarantee: ರಾಜ್ಯದಲ್ಲಿ ಶಕ್ತಿ ಯೋಜನೆಯಡಿ (Free bus service) ಮಹಿಳಾಮಣಿಗಳ ಟೆಂಪಲ್‌ ರನ್‌ ಮುಂದುವರಿದಿದೆ. ಗೊರವನಹಳ್ಳಿ ಮಹಾಲಕ್ಷ್ಮಿ ದರ್ಶನಕ್ಕಾಗಿ ಬಂದಿದ್ದ ಗೃಹಲಕ್ಷ್ಮಿಯರತ್ತ ಕೆಎಸ್‌ಆರ್‌ಟಿಸಿ ಚಾಲಕನೊಬ್ಬ ಬಸ್ಸನ್ನು ಚಲಾಯಿಸಿರುವ ಘಟನೆ ನಡೆದಿದೆ. ಇದೀಗ ಈ ವಿಡಿಯೊ ವೈರಲ್‌ (Video Viral) ಆಗಿದೆ.

VISTARANEWS.COM


on

Free bus service
ಮಹತ್ವದ, ಕುತೂಹಲಕರ ಸುದ್ದಿಗಾಗಿ ಫಾಲೊ ಮಾಡಿ
Koo

ತುಮಕೂರು: ಕಾಂಗ್ರೆಸ್‌ ಗ್ಯಾರಂಟಿ ಯೋಜನೆಯ ಮೊದಲ ಭಾಗವಾದ “ಶಕ್ತಿ” ಯೋಜನೆಗೆ ಮಹಿಳೆಯರಿಂದ ಉತ್ತಮ ಪ್ರತಿಕ್ರಿಯೆ ಸಿಕ್ಕಿದೆ. ಮಹಿಳೆಯರು ಇದರ ಸಂಪೂರ್ಣ ಲಾಭ ಪಡೆಯಲು ಪುಣ್ಯಕ್ಷೇತ್ರಗಳಿಗೆ ತಂಡೋಪ ತಂಡವಾಗಿ ಭೇಟಿ ನೀಡುತ್ತಿದ್ದಾರೆ. ಹೀಗೆ ಕೊಳ್ಳೇಗಾಲದಿಂದ ತುಮಕೂರಿನ ಗೊರವನಹಳ್ಳಿ ಮಹಾಲಕ್ಷ್ಮಿ ದರ್ಶನಕ್ಕೆ ಬಂದಿದ್ದ ಮಹಿಳೆಯರಿಗೆ ಕೆಎಸ್‌ಆರ್‌ಟಿಸಿ ಚಾಲಕನೊಬ್ಬ ಅನಾಗರಿಕವಾಗಿ ವರ್ತಿಸಿದ್ದಾನೆ. ಈ ವಿಡಿಯೊ ವೈರಲ್‌ (Video Viral) ಆಗಿದೆ.

ಮಹಿಳೆಯರನ್ನು ಬಸ್ಸಿನಲ್ಲಿ ಹತ್ತಿಸಿಕೊಳ್ಳದೆ ಹೋದ ಕೆಎಸ್‌ಆರ್‌ಟಿಸಿ ಚಾಲಕ

ಜೂನ್‌ 15ರಂದು ತುಮಕೂರಿನ ಕೊರಟಗೆರೆಯ ನಾಗೇನಹಳ್ಳಿ ಗೇಟ್ ಬಳಿ ಮಹಾಲಕ್ಷ್ಮಿ ದರ್ಶನ ಮುಗಿಸಿ ಐದಾರು ಮಹಿಳೆಯರು ಊರಿಗೆ ಹೋಗಲು ಬಸ್‌ ನಿಲ್ದಾಣಕ್ಕೆ ಬಂದಿದ್ದರು. ಈ ವೇಳೆ ಮಹಿಳೆಯರು ಕೆಎಸ್‌ಆರ್‌ಟಿಸಿ ಬಸ್ಸಿಗೆ ಕೈ ತೋರಿಸಿದರೂ, ಯಾವ ಬಸ್‌ ಚಾಲಕನು ಬಸ್‌ ನಿಲ್ಲಿಸಿಲ್ಲ.ಸಂಜೆಯಿಂದ ಎರಡು ತಾಸುಕಾದರೂ ಯಾವ ಬಸ್ ನಿಲ್ಲಿಸುತ್ತಿಲ್ಲ. ಹೀಗಾಗಿ ಮಹಿಳೆಯರು ಬಸ್‌ವೊಂದನ್ನು ತಡೆಯಲು ಮುಂದಾಗಿದ್ದರು.

ಈ ವೇಳೆ ಚಾಲಕ ಕಲೆಕ್ಷನ್ ಆಗಲ್ಲ ಎಂದಿದ್ದಾನೆ. ಇದರಿಂದ ಸಿಟ್ಟಿಗೆದ್ದ ಮಹಿಳೆಯರು ಚಾಲಕನನ್ನು ಪ್ರಶ್ನಿಸಲು ಮುಂದಾಗಿದ್ದಾರೆ. ಆಗ ಏಕಾಏಕಿ ಚಾಲಕ ಮಹಿಳಾ ಪ್ರಯಾಣಿಕರತ್ತ ಬಸ್ಸನ್ನು ಚಲಾಯಿಸಿದ್ದಾನೆ. ಪುಟ್ಟ ಕಂದಮ್ಮನನ್ನು ಎತ್ತಿಕೊಂಡು ನಿಂತಿದ್ದ ಮಹಿಳೆಯನ್ನು ಕಂಡರೂ ಚಾಲಕನ ಮನಸ್ಸು ಕರಗಿಲ್ಲ. ಸ್ಥಳೀಯರೊಬ್ಬರು ಇದನ್ನು ರೆಕಾರ್ಡ್‌ ಮಾಡಿಕೊಂಡಿದ್ದು, ಸೋಶಿಯಲ್‌ ಮೀಡಿಯಾದಲ್ಲಿ ವೈರಲ್‌ ಆಗುತ್ತಿದೆ. ಸಾರಿಗೆ ಬಸ್ ಚಾಲಕನ ಅನಾಗರಿಕ ವರ್ತನೆಗೆ ಸಾರ್ವಜನಿಕ ವಲಯದಲ್ಲಿ ಆಕ್ರೋಶಕ್ಕೆ ಕಾರಣವಾಗಿದೆ.

ತಹಸೀಲ್ದಾರ್‌ ಮೊರೆ ಹೋದ ಮಹಿಳೆಯರು

ಹೀಗೆ ಬಸ್‌ಗಾಗಿ ಕಾದು ಸುಸ್ತಾದ ಮಹಿಳೆಯರು ಕೊನೆಗೆ ತಹಸೀಲ್ದಾರ್‌ ಬಳಿ ಹೋಗಿದ್ದಾರೆ. ನಡೆದ ಎಲ್ಲ ಘಟನೆಯನ್ನು ವಿವರಿಸಿ, ಚಾಲಕನ ವರ್ತನೆಗೆ ಕಿಡಿಕಾರಿದ್ದಾರೆ. ಸ್ಥಳಕ್ಕೆ ತಹಸೀಲ್ದಾರ್ ಮುನಿಶಾಮಿ ರೆಡ್ಡಿ ಭೇಟಿ ನೀಡಿ ಮಹಿಳೆಯರನ್ನು ಸಮಾಧಾನಿಸಿ ಬಸ್‌ ಹತ್ತಿಸಿ ಕಳುಹಿಸಿದ್ದಾರೆ.

ಚಾಲಕನಿಗೆ ಎಚ್ಚರಿಕೆ ಕೊಟ್ಟ ಅನ್ಬುಕುಮಾರ್‌

ನಿಗಮದ ಚಾಲಕರೊಬ್ಬರು ಮಹಿಳಾ ಪ್ರಯಾಣಿಕರತ್ತ ಬಸ್ಸನ್ನು ಚಲಾಯಿಸಿದರು ಎಂದು ಮಾಧ್ಯಮದಲ್ಲಿ ಸುದ್ದಿ ಬಿತ್ತರವಾಗುತ್ತಿದ್ದಂತೆ ಕೆಎಸ್‌ಆರ್‌ಟಿಸಿ ಎಂಡಿ ಅನ್ಬುಕುಮಾರ್‌ ವಿಷಾಧ ವ್ಯಕ್ತಪಡಿಸಿದ್ದಾರೆ. ಘಟನೆಯನ್ನು ಗಂಭೀರವಾಗಿ ತೆಗೆದುಕೊಳ್ಳಲಾಗಿದ್ದು, ಚಾಲನಾ ಸಿಬ್ಬಂದಿಗೆ ಎಚ್ಚರಿಕೆ ನೀಡಲಾಗಿದೆ.

ಇದನ್ನೂ ಓದಿ: Free Bus Service : ಟಿಕೆಟ್‌ ಬುಕಿಂಗ್‌ಗೆ ಮಹಿಳೆಯರ ಮೇಲಾಟ; KSRTC ಸರ್ವರೇ ಡೌನ್!‌

ನಿಗಮದ‌ ಹಿರಿಯ ಅಧಿಕಾರಿಗಳಿಗೆ ವಿಭಾಗಗಳಿಗೆ ಉಸ್ತುವಾರಿಗೆ ಕಳುಹಿಸಿ, ಚಾಲನಾ ಸಿಬ್ಬಂದಿಗೆ ಈ ಬಗ್ಗೆ ಮತ್ತಷ್ಟು ಅರಿವು ಮತ್ತು ಜಾಗೃತಿ ಮೂಡಿಸಲಾಗುವುದು. ಮಹಿಳಾ ಪ್ರಯಾಣಿಕರೊಂದಿಗೆ ಸೌಹಾರ್ದತೆಯಿಂದ ಸ್ಪಂದಿಸಲು ತಿಳುವಳಿಕೆ‌ ನೀಡಲಾಗುವುದು ಎಂದು ತಿಳಿಸಿದ್ದಾರೆ.

ರಾಜ್ಯದ ಇನ್ನಷ್ಟು ಸುದ್ದಿಗಾಗಿ ಈ ಲಿಂಕ್‌ ಕ್ಲಿಕ್‌ ಮಾಡಿ

ಕ್ಷಣ ಕ್ಷಣದ ಮಾಹಿತಿಗಾಗಿ Vistara News FaceBook ಪೇಜ್ ಫಾಲೋ ಮಾಡಿ
ಮಹತ್ವದ ಮಾಹಿತಿಗಾಗಿ ವಿಸ್ತಾರ ನ್ಯೂಸ್ ಆ್ಯಪ್ ಉಚಿತವಾಗಿ ಡೌನ್ ಲೋಡ್ ಮಾಡಿಕೊಳ್ಳಿ: Andriod App | IOS App
Continue Reading
Click to comment

Leave a Reply

Your email address will not be published. Required fields are marked *

ವಿಜಯಪುರ

Road Accident: ಬಸ್‌ ಹರಿದು ವ್ಯಕ್ತಿ ಸಾವು; ಮರಳೇಕಾಯಿ ತಿಂದು 8 ಮಕ್ಕಳು ಅಸ್ವಸ್ಥ

Road Accident: ಬೆಂಗಳೂರಿನಿಂದ ವಿಜಯಪುರಕ್ಕೆ ಬರುತ್ತಿದ್ದ ಖಾಸಗಿ ಬಸ್, ಸರ್ಕಲ್‌ನಲ್ಲಿ ರಸ್ತೆ ದಾಟುತ್ತಿದ್ದ ಅಶೋಕ ಮೇಲೆ ಹರಿದಿದೆ. ಟ್ರಾಫಿಕ್ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಪ್ರಕರಣ ದಾಖಲಾಗಿದೆ. ಬಸ್‌ ಚಾಲಕನನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ.

VISTARANEWS.COM


on

road accident vijayapura
Koo

ವಿಜಯಪುರ: ಬಸ್ ಮೈಮೇಲೆ ಹರಿದು (Bus Accident) ವ್ಯಕ್ತಿಯೊಬ್ಬರು ಸ್ಥಳದಲ್ಲೇ ಸಾವಿಗೀಡಾಗಿದ್ದಾರೆ. ದುರ್ಘಟನೆ (Road Accident) ವಿಜಯಪುರ (Vijayapura News) ನಗರದ ಬಸವೇಶ್ವರ ವೃತ್ತದಲ್ಲಿ ನಡೆದಿದೆ. ಮೃತಪಟ್ಟವರನ್ನು ಅಶೋಕ ಪರ್ಜೆನವರ್ (58) ಎಂದು ಗುರುತಿಸಲಾಗಿದೆ.

ಬೆಂಗಳೂರಿನಿಂದ ವಿಜಯಪುರಕ್ಕೆ ಬರುತ್ತಿದ್ದ ಖಾಸಗಿ ಬಸ್, ಸರ್ಕಲ್‌ನಲ್ಲಿ ರಸ್ತೆ ದಾಟುತ್ತಿದ್ದ ಅಶೋಕ ಮೇಲೆ ಹರಿದಿದೆ. ಟ್ರಾಫಿಕ್ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಪ್ರಕರಣ ದಾಖಲಾಗಿದೆ. ಬಸ್‌ ಚಾಲಕನನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ.

ಮರಳೇಕಾಯಿ ತಿಂದು 8 ಮಕ್ಕಳು ಅಸ್ವಸ್ಥ

ಮಂಡ್ಯ: ಮರಳೇಕಾಯಿ ತಿಂದು 8 ಮಂದಿ ಮಕ್ಕಳು ಅಸ್ವಸ್ಥರಾದ ಘಟನೆ (children unwell mandya) ಮಂಡ್ಯ ಜಿಲ್ಲೆ ಮದ್ದೂರು ತಾಲೂಕಿನ ಉಪ್ಪಾರದೊಡ್ಡಿ ಗ್ರಾಮದಲ್ಲಿ ನಡೆದಿದೆ. ಮನೆಯೊಂದರ ಹಿಂದೆ ಬೆಳೆದಿದ್ದ ಮರಳೇಕಾಯಿ ಗಿಡದಲ್ಲಿ ಬಿಟ್ಟ ಕಾಯಿಯನ್ನು ನಿನ್ನೆ ಸಂಜೆ ಆಟವಾಡುತ್ತಿರುವಾಗ ಮಕ್ಕಳು ತಿಂದಿದ್ದರು. ಕಾಯಿ ತಿಂದು ಅಸ್ವಸ್ಥಗೊಂಡ ಮಕ್ಕಳ ಪೈಕಿ ಕೆಲವರಿಗೆ ವಾಂತಿಯಾಗಿದೆ. ಕೂಡಲೇ ಮಕ್ಕಳನ್ನು ಮದ್ದೂರು ಸರ್ಕಾರಿ‌ ಆಸ್ಪತ್ರೆಗೆ ಪೋಷಕರು ಕರೆದುಕೊಂಡು ಬಂದಿದ್ದಾರೆ.

ಆಸ್ಪತ್ರೆಯಲ್ಲಿ ಪ್ರಥಮ ಚಿಕಿತ್ಸೆ ನೀಡಿ ಮಂಡ್ಯ‌ ಮಿಮ್ಸ್ ಆಸ್ಪತ್ರೆಗೆ ಕರೆದೊಯ್ಯಲಾಗಿದೆ. ಮಂಡ್ಯ ಮಿಮ್ಸ್ ಆಸ್ಪತ್ರೆಯಲ್ಲಿ ಮಕ್ಕಳಿಗೆ ಚಿಕಿತ್ಸೆ ಮುಂದುವರಿಸಲಾಗಿದೆ. ಸದ್ಯ ಚಿಕಿತ್ಸೆಗೆ ಮಕ್ಕಳು ಸ್ಪಂದಿಸುತ್ತಿದ್ದಾರೆ.ಸೃಜನ್ (11), ಜ್ಞಾನವಿ (09) , ಸಿಂಚನ (05), ಆಷಿಕಾ (06), ಭುವನೇಶ್ವರಿ (07), ಚರಣ (09), ಧ್ರುವಚರಣ್ (09), ಚಂದ್ರ (07) ಅಸ್ವಸ್ಥಗೊಂಡ ಮಕ್ಕಳು.

ಮೂರು ತಿಂಗಳ ಮಗು ಬಿಟ್ಟು ತಾಯಿ ಪರಾರಿ

ತುಮಕೂರು: ತಾಯಿಯೊಬ್ಬಳು ರಸ್ತೆ ಬದಿಯಲ್ಲಿ ಮೂರು ತಿಂಗಳ ಮಗುವನ್ನು ಅನಾಥವಾಗಿ ಬಿಟ್ಟು ಹೋಗಿರುವ ಪ್ರಕರಣ ತುಮಕೂರು ಜಿಲ್ಲೆ ತಿಪಟೂರು ತಾಲೂಕಿನ ಹೆಡಗರಹಳ್ಳಿ ಗ್ರಾಮದಲ್ಲಿ ನಡೆದಿದೆ.

ಮಗುವಿನ ಅಳುವಿನ ಶಬ್ದ ಕೇಳಿ ಆಶಾ ಕಾರ್ಯಕರ್ತೆಯೊಬ್ಬರು ಮಗುವನ್ನ ರಕ್ಷಿಸಿದ್ದಾರೆ. ರಾತ್ರಿ ಊಟ ಮಾಡಿ ವಾಕಿಂಗ್ ಮಾಡುತ್ತಿದ್ದ ಆಶಾ ಕಾರ್ಯಕರ್ತೆ ಕಲಾವತಿ ಅವರಿಗೆ ರಸ್ತೆ ಬದಿಯಲ್ಲಿ ಅಳುತ್ತಿದ್ದ ಮಗುವಿನ ಶಬ್ದ ಕೇಳಿಸಿತ್ತು. ಸ್ಥಳಕ್ಕೆ ಹೋದಾಗ, ಮೂರು ತಿಂಗಳ ಮಗುವನ್ನು ಬಿಟ್ಟು ಹೋಗಿರುವುದು ಬೆಳಕಿಗೆ ಬಂದಿದೆ.

ಕೂಡಲೇ ನೊಣವಿನಕೆರೆ ಪೊಲೀಸರಿಗೆ ಆಶಾ ಕಾರ್ಯಕರ್ತೆ ಕಲಾವತಿ ಮಾಹಿತಿ ನೀಡಿದ್ದಾರೆ. ಆಂಬ್ಯುಲೆನ್ಸ್ ಮೂಲಕ ತಿಪಟೂರು ಸಾರ್ವಜನಿಕ ಆಸ್ಪತ್ರೆಗೆ ಮಗು ಕರೆದೊಯ್ಯಲಾಗಿದೆ. ವೈದ್ಯರು ಮಗುವಿನ ಆರೋಗ್ಯ ತಪಾಸಣೆ ನಡೆಸಿದ್ದು, ಆರೋಗ್ಯವಾಗಿರುವ ಮಗು 4.5 ಕೆಜಿಯಷ್ಟು ತೂಕವಿದೆ. ನೊಣವಿನಕೆರೆ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಮಗುವಿನ ಪೋಷಕರ ಪತ್ತೆಗೆ ಪೊಲೀಸರು ಮುಂದಾಗಿದ್ದಾರೆ.

ಇದನ್ನೂ ಓದಿ: Leopard attack : ರಾಯಚೂರಿನಲ್ಲಿ ಮೂವರ ಮೇಲೆ ದಾಳಿ ಮಾಡಿ ಕಾಲ್ಕಿತ್ತ ಚಿರತೆ!

Continue Reading

ಉಡುಪಿ

Kundapura Kannada:  ಅರಮನೆ ಮೈದಾನದಲ್ಲಿ ಈ ಬಾರಿ `ವಿಶ್ವ ಕುಂದಾಪುರ ಕನ್ನಡ ಹಬ್ಬ’; ಕಾರ್ಯಕ್ರಮದ ವಿವರ ಪಟ್ಟಿ ಇಲ್ಲಿದೆ!

Kundapura Kannada:  ಕುಂದಾಪ್ರ ಕನ್ನಡ ಪ್ರತಿಷ್ಠಾನ, ಬೆಂಗಳೂರು’ ಮೂಲಕ ಆಯೋಜನೆ ಆಗುತ್ತಿರುವ ಈ ಆಚರಣೆಯ ದಿನ-ಸ್ಥಳ ಘೋಷಣೆ ಕುರಿತು ಬೆಂಗಳೂರಿನ ಸುದೀಕ್ಷಾ ಕನ್ವೆನ್ಷನ್ ಹಾಲ್‌ನಲ್ಲಿ ಜು. 7ರಂದು ಹಮ್ಮಿಕೊಂಡಿದ್ದ ‘ವಾಲ್ಗ’ ಕಾರ್ಯಕ್ರಮದಲ್ಲಿ ವಿವರಗಳನ್ನು ನೀಡಲಾಯಿತು. ಆರು ವರ್ಷಗಳ ಹಿಂದೆ ಈ ಆಚರಣೆ ಆರಂಭವಾಗಿದ್ದು, ಇದು ಐದನೇ ವಿಶ್ವ ಕುಂದಾಪುರ ಕನ್ನಡ ದಿನಾಚರಣೆ ಆಗಿದೆ.

VISTARANEWS.COM


on

Kundapura Kannada This time Kundapura Kannada Festival at the palace grounds Here is the list of program
Koo

ಬೆಂಗಳೂರು: ಕುಂದಾಪುರದಲ್ಲಿ (Kundapura Kannada) ಎಷ್ಟು ಸೊಬಗಿದೆಯೋ ಅಷ್ಟೇ ಸೊಬಗಿನ ಸೊಗಡು ಆ ಭಾಷೆಯಲ್ಲೂ ಇದೆ. ಕುಂದಾಪುರ, ಬ್ರಹ್ಮಾವರ, ಬೈಂದೂರು, ಹೆಬ್ರಿ ತಾಲೂಕಿನಲ್ಲಿ ಬಳಸಲಾಗುವ ವಿಶಿಷ್ಟ ಶೈಲಿಯ ಕನ್ನಡವೇ ಕುಂದಾಪುರ ಕನ್ನಡ.  ಕರಾವಳಿಯ ಕುಂದಗನ್ನಡಿಗರು ತಮ್ಮ ಭಾಷೆ-ಬದುಕಿನ ಮೇಲಿನ ಅಭಿಮಾನದಿಂದ ಪ್ರತಿವರ್ಷ ‘ವಿಶ್ವ ಕುಂದಾಪ್ರ/ಕುಂದಾಪುರ ಕನ್ನಡ ದಿನ’ವನ್ನು ಆಚರಣೆ ಮಾಡುತ್ತಿದ್ದು, ಈ ಸಲ ಬೆಂಗಳೂರಿನಲ್ಲಿ ಎಂದಿಗಿಂತ ಅದ್ಧೂರಿಯಾಗಿ ನಡೆಯಲಿದೆ. ಈ ಬಾರಿ ಕುಂದಾಪುರ ಕನ್ನಡ ದಿನಾಚರಣೆಯು ಬೆಂಗಳೂರಿನ ಅರಮನೆ ಮೈದಾನದಲ್ಲಿ ಎರಡು ದಿನ ವಿಜೃಂಭಣೆಯಿಂದ ನೆರವೇರಲಿದೆ. ರಾಜಧಾನಿ ಬೆಂಗಳೂರಿನಲ್ಲಿ ಕುಂದಗನ್ನಡ ಲೋಕವನ್ನು ಭರ್ಜರಿಯಾಗಿ ಅನಾವರಣಗೊಳಿಸುವ ಈ ಕಾರ್ಯಕ್ರಮ ಆಗಸ್ಟ್ 17 ಮತ್ತು 18ರಂದು ಅರಮನೆ ಮೈದಾನದ ವೈಟ್ ಪೆಟಲ್ಸ್‌ನಲ್ಲಿ ನಡೆಯಲಿದೆ.

‘ಕುಂದಾಪ್ರ ಕನ್ನಡ ಪ್ರತಿಷ್ಠಾನ, ಬೆಂಗಳೂರು’ ಮೂಲಕ ಆಯೋಜನೆ ಆಗುತ್ತಿರುವ ಈ ಆಚರಣೆಯ ದಿನ-ಸ್ಥಳ ಘೋಷಣೆ ಕುರಿತು ಬೆಂಗಳೂರಿನ ಸುದೀಕ್ಷಾ ಕನ್ವೆನ್ಷನ್ ಹಾಲ್‌ನಲ್ಲಿ ಜು. 7ರಂದು ಹಮ್ಮಿಕೊಂಡಿದ್ದ ‘ವಾಲ್ಗ’ ಕಾರ್ಯಕ್ರಮದಲ್ಲಿ ವಿವರಗಳನ್ನು ನೀಡಲಾಯಿತು. ಆರು ವರ್ಷಗಳ ಹಿಂದೆ ಈ ಆಚರಣೆ ಆರಂಭವಾಗಿದ್ದು, ಇದು ಐದನೇ ವಿಶ್ವ ಕುಂದಾಪುರ ಕನ್ನಡ ದಿನಾಚರಣೆ ಆಗಿದೆ.

ಇದನ್ನೂ ಓದಿ: Kannada New Movie: ಕುಂದಾಪುರ ಕನ್ನಡ ಹೈಲೈಟ್‌, ʻಅಭಿರಾಮಚಂದ್ರʼ ಟ್ರೈಲರ್‌ ಔಟ್‌; ಪ್ರಮೋದ್ ಶೆಟ್ಟಿ ಸಾಥ್!

ಅರಮನೆ ಮೈದಾನದಲ್ಲಿ ಹಬ್ಬ

ಕಳೆದ ನಾಲ್ಕು ಕುಂದಾಪ್ರ ಕನ್ನಡ ಹಬ್ಬಗಳು ವಿಜಯನಗರದ ಬಂಟರ ಸಂಘದಲ್ಲಿ ಆಗಿದ್ದವು. ಆದರೆ ಅದಕ್ಕೆ ಬೃಹತ್ ಜನಸ್ತೋಮ ಹರಿದುಬಂದಿದ್ದು ಸುಮಾರು ಶೇ. 70 ಜನರಿಗೆ ಬಂಟರ ಸಂಘಕ್ಕೆ ಪ್ರವೇಶಿಸಲಿಕ್ಕೂ ಆಗಿರಲಿಲ್ಲ. ಹೀಗಾಗಿ ಈ ವರ್ಷ ಅರಮನೆ ಮೈದಾನದಲ್ಲಿ ಆಯೋಜಿಸಲಾಗಿದೆ, ಈ ಬಾರಿ ಇನ್ನೂ ದೊಡ್ಡ ಪ್ರಮಾಣದಲ್ಲಿ ಜನರು ಸೇರಲಿದ್ದಾರೆ ಎಂದು ಕುಂದಾಪ್ರ ಕನ್ನಡ ಪ್ರತಿಷ್ಠಾನದ ಅಧ್ಯಕ್ಷ ದೀಪಕ್ ಶೆಟ್ಟಿ ಬಾರ್ಕೂರು ತಿಳಿಸಿದರು.

ಬೃಹತ್ ಮೆರವಣಿಗೆ

ಎರಡು ದಿನಗಳ ಈ ಕಾರ್ಯಕ್ರಮ ‘ದಿಬ್ಣ’ದೊಂದಿಗೆ ಆರಂಭವಾಗಲಿದೆ. ಅದರಲ್ಲಿ ಬೆಂಗಳೂರಿನ ಕನಿಷ್ಠ 10 ಕಡೆಗಳಿಂದ ಜನರು ಮೆರವಣಿಗೆ ಮೂಲಕ ಕಾರ್ಯಕ್ರಮ ಸ್ಥಳಕ್ಕೆ ಆಗಮಿಸಲಿದ್ದಾರೆ. ‘ನಾಕ್ ಘನಾ ಸುರ್ಲ್’ ಎಂಬ ಕರಾವಳಿಯ ಅದ್ಭುತ ಗೀತೆಗಳ ಗಾಯನವಿರಲಿದೆ. ನಂತರ ‘ನುಡಿ ಚಾವಡಿ’ ಎಂಬ ಕಾರ್ಯಕ್ರಮದ ಮೂಲಕ ಉದ್ಘಾಟನಾ ಸಮಾರಂಭ ನಡೆಯಲಿದೆ. ಅ.17ರ ರಾತ್ರಿ ಬೆಂಗಳೂರಿನಲ್ಲಿ ಪ್ರಪ್ರಥಮ ಬಾರಿಗೆ ‘ಜೋಡಾಟ’ ನಡೆಯಲಿದೆ. ರಾಜ್ಯದ ಯಕ್ಷರಂಗದ ಮೇರು ಕಲಾವಿದರು ಭಾಗವಹಿಸಲಿರುವ ಈ ಯಕ್ಷಗಾನಕ್ಕೇ 15-20 ಸಾವಿರ ಜನರು ಸೇರುವ ನಿರೀಕ್ಷೆ ಇದೆ ಎಂದು ದೀಪಕ್ ಶೆಟ್ಟಿ ವಿವರಿಸಿದರು. ಮಾತ್ರವಲ್ಲದೆ, ಕನ್ನಡ ಚಿತ್ರರಂಗದ ಸ್ಟಾರ್ ನಟ-ನಿರ್ದೇಶಕರು ಸೇರಿದಂತೆ ಹಲವು ತಾರೆಯರು ಕೂಡ ಭಾಗಿ ಆಗಲಿರುವುದರಿಂದ ಈ ಸಂಭ್ರಮಕ್ಕೆ ತಾರಾ ಕಳೆ ಇರಲಿದೆ ಎಂದರು.

ಖ್ಯಾತ ಸಂಗೀತ ನಿರ್ದೇಶಕ ರವಿ ಬಸ್ರೂರು, ಖ್ಯಾತ ಚಿತ್ರ ಸಾಹಿತಿ ಪ್ರಮೋದ್ ಮರವಂತೆ, ಕುಂದಾಪ್ರ ಕನ್ನಡ ಪ್ರತಿಷ್ಠಾನದ ಗೌರವಾಧ್ಯಕ್ಷ ಉದಯಕುಮಾರ್ ಹೆಗ್ಡೆ, ಉಪಾಧ್ಯಕ್ಷ ನರಸಿಂಹ ಬೀಜಾಡಿ, ಕಾರ್ಯದರ್ಶಿ ರಾಘವೇಂದ್ರ ಕಾಂಚನ್, ಕೋಶಾಧಿಕಾರಿ ವಿಜಯ್ ಶೆಟ್ಟಿ ಹಾಲಾಡಿ, ಜಂಟಿ ಕಾರ್ಯದರ್ಶಿ ಅಜಿತ್ ಶೆಟ್ಟಿ ಉಳ್ತೂರು, ಯುನಿವರ್ಸಲ್ ಗ್ರೂಪ್ ಆಫ್ ಇನ್‌ಸ್ಟಿಟ್ಯೂಷನ್ಸ್ ಸಂಸ್ಥಾಪಕ ನಿರ್ದೇಶಕ ಆರ್.ಉಪೇಂದ್ರ ಶೆಟ್ಟಿ, ಹೋಟೆಲೋದ್ಯಮಿ ಸತೀಶ್ ಶೆಟ್ಟಿ ಸುದ್ದಿಗೋಷ್ಠಿಯಲ್ಲಿ ಉಪಸ್ಥಿತರಿದ್ದರು.

ಇದನ್ನೂ ಓದಿ: Kundapura Kannada: ಬೆಂಗಳೂರಲ್ಲಿ ʻವಿಶ್ವ ಕುಂದಾಪುರ ಕನ್ನಡ ಹಬ್ಬʼ; ಶಾಸಕ ಗುರುರಾಜ್ ಗಂಟಿಹೊಳೆ ಭಾಗಿ!

ಏನಿದು ವಿಶ್ವ ಕುಂದಾಪ್ರ ಕನ್ನಡ ದಿನಾಚರಣೆ?

ಆಸಾಡಿ ಅಮಾಸಿ/ ಆಟಿ ಅಮಾವಾಸ್ಯೆ (ಕರ್ಕಾಟಕ ಅಮಾವಾಸ್ಯೆ) ದಿನ ಕರಾವಳಿಗರಿಗೆ ಅತ್ಯಂತ ವಿಶೇಷವಾದದ್ದು. ಕಳೆದ ಐದು ವರ್ಷಗಳಿಂದ ಪ್ರತಿ ವರ್ಷ ಈ ಕರ್ಕಾಟಕ ಅಮಾವಾಸ್ಯೆ ದಿನವನ್ನು ವಿಶ್ವ ಕುಂದಾಪ್ರ ಕನ್ನಡ ದಿನ ಎಂದು ಆಚರಣೆ ಮಾಡಲಾಗುತ್ತಿದ್ದು, ಈ ಸಲ ಆಗಸ್ಟ್ 04ರಂದು ಆಷಾಢ ಅಮಾವಾಸ್ಯೆ ಬಂದಿದೆ. ಅದು ವಾರದ ದಿನವಾದ್ದರಿಂದ, ಆಯೋಜನೆ ಹಾಗೂ ಆಗಮಿಸುವ ಅತಿಥಿ ಗಣ್ಯರ ಅನುಕೂಲದ ದೃಷ್ಟಿಯಿಂದ ಬೆಂಗಳೂರಿನಲ್ಲಿ ಆಗಸ್ಟ್ 17, 18ರಂದು ವಿಶ್ವ ಕುಂದಾಪುರ ಕನ್ನಡ ದಿನವನ್ನು ಕುಂದಾಪ್ರ ಕನ್ನಡ ಹಬ್ಬವಾಗಿ ಆಚರಿಸಲಾಗುತ್ತಿದೆ. ಕುಂದಾಪ್ರ ಕನ್ನಡ ಹಬ್ಬವು ಹಲವು ಸಾಂಸ್ಕೃತಿಕ ಸಡಗರಗಳಿಗೆ ಇದು ವೇದಿಕೆ ಆಗಲಿದ್ದು, ಕುಂದಾಪ್ರ ಕನ್ನಡ ಭಾಷೆಯ ಸೊಬಗನ್ನು ಪಸರಿಸಲಿದೆ.

ಎರಡು ದಿನಗಳ ಕಾರ್ಯಕ್ರಮಗಳ ಪಟ್ಟಿ

  • ‘ಹಂದಾಡ್ತ ನೆಗ್ಯಾಡಿ’: ಕುಂದಾಪ್ರ ಕನ್ನಡದ ನಗೆ ರಾಯಭಾರಿ ಮನು ಹಂದಾಡಿ ಅವರಿಂದ ನಗೆ ಪ್ರಹಸನ.
  • ‘ಬಯಲಾಟ’: ಗ್ರಾಮೀಣ ಕ್ರೀಡೋತ್ಸವ
  • ‘ರಥೋತ್ಸವ’: ಹಬ್ಬದ ರೀತಿಯಲ್ಲೇ ಭಾವಬೀದಿಯಲ್ಲಿ ಭಾಷೆಯ ತೇರು.
  • ‘ಪೆಟ್ಟ್ ಒಂದೇ, ಸ್ವರ ಬೇರೆ’: ಆಫ್ರಿಕದ ಜಂಬೆ, ಕುಂದಾಪುರದ ಚೆಂಡೆ ಜುಗಲ್ ಬಂದಿ.
  • ‘ಭುಜಬಲದ ಪರಾಕ್ರಮ’ ಹಗ್ಗಜಗ್ಗಾಟ 8 ಊರಿನ ಹೆಸರಲ್ಲಿ ತಂಡ.
  • ‘ಯಬ್ಯಾ ಸೌಂಡೇ’: ರವಿ ಬಸ್ರೂರು ಅವರ ಶತಕುಂದ ಪದ್ಯಗಳ ಡಿಜೆ
  • ‘ಡ್ಯಾನ್ಸ್ ಕುಂದಾಪ್ರ ಡ್ಯಾನ್ಸ್’: ವಿಶೇಷ ನೃತ್ಯ‌ ಪ್ರದರ್ಶನ
  • ‘ಗಂಡಿನ್ ಪಿಚ್ಚರ್ ಬಿಡ್ತ್’: ವಿಶೇಷ ಕಿರುಚಿತ್ರ ಪ್ರದರ್ಶನ
  • ‘ನಮ್ ಊರ್ಮನಿ ಪಿಚ್ಚರ್ ಯಾಕ್ಟ್ರ್ಸ್’: ಊರಿನ ಸಿನಿತಾರೆಯರು, ಸೂಪರ್ ಸ್ಟಾರ್‌ಗಳ ಸಮಾಗಮ.
  • ‘ಕುಂದಾಪ್ರ ಸಂತಿ’: ಕುಂದಾಪುರದಲ್ಲಿ ನಡೆಯುವ ಇತಿಹಾಸ ಪ್ರಸಿದ್ಧ ಸಂತೆ.
  • ‘ಹೊಟ್ಟಿ ಕಂಡದ್ ನಾವೇ ಸೈ’: ಕರಾವಳಿಯ ವಿಶೇಷ ಖಾದ್ಯ ಮೇಳ.
Continue Reading

ಕಲಬುರಗಿ

Swamiji Death: ವಿರಕ್ತ ಮಠದ ಶ್ರೀ ಸಿದ್ದರಾಮ ಮಹಾಸ್ವಾಮಿ ವಿಧಿವಶ

Swamiji Death: ಕಲಬುರಗಿ ಜಿಲ್ಲೆ ಕಾಳಗಿ ತಾಲೂಕಿನ ರಟಕಲ್ ಗ್ರಾಮದಲ್ಲಿ ಈ ವಿರಕ್ತ ಮಠವಿದ್ದು, ನಸುಕಿನ ಜಾವ ತೀವ್ರ ಹೃದಯಾಘಾತದಿಂದ ಶ್ರೀ ಸಿದ್ದರಾಮ ಮಹಾಸ್ವಾಮಿಗಳು ಲಿಂಗೈಕ್ಯರಾಗಿದ್ದಾರೆ.

VISTARANEWS.COM


on

swamiji death kalaburagi viraktha math
Koo

ಕಲಬುರಗಿ: ವಿರಕ್ತ ಮಠದ ಶ್ರೀ ಸಿದ್ದರಾಮ ಮಹಾಸ್ವಾಮಿಗಳು (35) ತೀವ್ರ ಹೃದಯಾಘಾತದಿಂದ (heart attack) ಇಂದು (Swamiji Death) ವಿಧಿವಶರಾಗಿದ್ದಾರೆ. ಕಲಬುರಗಿ (Kalaburagi news) ಜಿಲ್ಲೆ ಕಾಳಗಿ ತಾಲೂಕಿನ ರಟಕಲ್ ಗ್ರಾಮದಲ್ಲಿ ಈ ವಿರಕ್ತ ಮಠವಿದ್ದು, ನಸುಕಿನ ಜಾವ ತೀವ್ರ ಹೃದಯಾಘಾತದಿಂದ ಶ್ರೀ ಸಿದ್ದರಾಮ ಮಹಾಸ್ವಾಮಿಗಳು (Viraktha Math Siddarama Swamy) ಲಿಂಗೈಕ್ಯರಾಗಿದ್ದಾರೆ.

ನಿನ್ನೆ ರಟಕಲ್ ಗ್ರಾಮದಲ್ಲಿ ನಡೆದಿದ್ದ ಅದ್ಧೂರಿ ವಚನ ಸಂಗಮ ಕಾರ್ಯಕ್ರಮದಲ್ಲಿ ಶ್ರೀಗಳು ಭಾಗಿಯಾಗಿದ್ದರು. ವಚನ ಸಂಗಮ ಕಾರ್ಯಕ್ರಮದಲ್ಲಿ ಸಚಿವ ಡಾ. ಶರಣಪ್ರಕಾಶ್ ಪಾಟೀಲ್, ಶಾಸಕ ಬಿ.ಆರ್ ಪಾಟೀಲ್ ಸೇರಿದಂತೆ ಅನೇಕ ಗಣ್ಯರು ಭಾಗವಹಿಸಿದ್ದರು. ಇಂದು ಸಂಜೆ 5 ಗಂಟೆಗೆ ರಟಕಲ್ ಗ್ರಾಮದಲ್ಲಿ ಧಾರ್ಮಿಕ ವಿಧಿ ವಿಧಾನದ ಪ್ರಕಾರ ಶ್ರೀಗಳ ಅಂತ್ಯಕ್ರಿಯೆ ನಡೆಯಲಿದೆ.

ಆಸ್ಪತ್ರೆಯಲ್ಲಿ ಆಕ್ಸಿಜನ್‌ ಸೋರಿಕೆ

ಕಲಬುರಗಿ: ಕಲಬುರಗಿ ಜಿಲ್ಲೆಯ (Kalaburagi News) ಚಿಂಚೊಳ್ಳಿ‌ ತಾಲೂಕು ಆಸ್ಪತ್ರೆಯಲ್ಲಿ ಆಕ್ಸಿಜನ್ ಸೋರಿಕೆ (Oxygen leakage) ಆಗಿದೆ ಎಂಬ ಸುದ್ದಿ ಕೇಳಿ ರೋಗಿಗಳು ಶಾಕ್‌ ಆಗಿದ್ದರು. ಆಸ್ಪತ್ರೆ ಹಿಂಭಾಗದಲ್ಲಿದ್ದ ಆಕ್ಸಿಜನ್ ಘಟಕದಿಂದ ಸೋರಿಕೆಯಾಗಿ ಅರ್ಧ ಕಿಮೀ ವ್ಯಾಪ್ತಿವರೆಗೂ ವಾಸನೆ ಮೂಗಿಗೆ ಬಡಿದಿತ್ತು.

ನೋಡನೋಡುತ್ತಿದ್ದ ಒಬ್ಬರಿಂದ ಒಬ್ಬರಿಗೆ ಆಕ್ಸಿಜನ್‌ ಸೋರಿಕೆ ಸುದ್ದಿ ಹರಿದಾಡಿದೆ. ಬಳಿಕ ಆಸ್ಪತ್ರೆಯೊಳಗೆ ಇದ್ದ ಸಿಬ್ಬಂದಿ, ರೋಗಿಗಳು ಭಯಭೀತರಾಗಿ ಹೊರಗೆ ಓಡಿ ಬಂದು ಆವರಣದೊಳಗೆ ಬಂದು ಕುಳಿತುಕೊಳ್ಳುವಂತಾಯಿತು. ಇತ್ತ ಆಕ್ಸಿಜನ್‌ ಟ್ಯಾಂಕ್‌ ಸ್ಫೋಟಗೊಂಡಿದೆ ಎಂಬ ಸುದ್ದಿಯಿಂದಾಗಿ ವೈದ್ಯರು ಮತ್ತು ಸಿಬ್ಬಂದಿ ತಗ್ಗಿದ ವಸತಿಗೃಹಗಳನ್ನು ಖಾಲಿ ಮಾಡಿದ್ದವು.

kalaburagi News

ವಿಷಯ ತಿಳಿಯುತ್ತಿದ್ದಂತೆ ಸ್ಥಳಕ್ಕೆ ಅಗ್ನಿಶಾಮಕ ಸಿಬ್ಬಂದಿ ಹಾಗೂ ಚಿಂಚೊಳ್ಳಿ ಪೊಲೀಸರು ದೌಡಾಯಿಸಿದ್ದರು. ಪರಿಶೀಲನೆ ನಡೆಸಿದಾಗ ಆಕ್ಸಿಜನ್‌ ಟ್ಯಾಂಕ್ ತುಂಬಿದ್ದರಿಂದ ಅದರ ಒತ್ತಡವನ್ನು ಹೊರಹಾಕಿದೆ ಎಂದು ಗೊತ್ತಾಗಿದೆ. ಈ ಕುರಿತು ಮಾಹಿತಿ ನೀಡಿರುವ ಕಲಬುರಗಿ ಡಿ.ಎಚ್.ಓ ಡಾ.ರತಿಕಾಂತ್ ಸ್ವಾಮಿ, ಆಮ್ಲಜನಕ ಟ್ಯಾಂಕ್ ಸ್ಪೋಟವಾಗಿದೆ ಎಂಬುದು ಸುಳ್ಳು ಸುದ್ದಿ. ಸಾರ್ವಜನಿಕರು ಆತಂಕ ಪಡಬೇಕಿಲ್ಲ ಎಂದು ಸ್ಪಷ್ಟಪಡಿಸಿದರು.

ಆಕ್ಸಿಜನ್‌ ಟ್ಯಾಂಕ್ ತುಂಬಿದ ನಂತರ ಅದರ ಒತ್ತಡವನ್ನು ಗ್ಯಾಸ್ ರೂಪದಲ್ಲಿ ಹೊರಹಾಕುವ ಸಾಮಾನ್ಯ ಪ್ರಕ್ರಿಯೆ ಆಗಿದೆ. ಆಸ್ಪತ್ರೆಯಲ್ಲಿನ 6 ಕೆ.ಎಲ್. ಸಾಮರ್ಥ್ಯದ ಟ್ಯಾಂಕಿಗೆ ಆಮ್ಲಜನಕ ಭರ್ತಿ ಮಾಡಿದೆ. ಒತ್ತಡ ಕಡಿಮೆ ಮಾಡಿಕೊಳ್ಳಲು ಎ, ಬಿ, ಸಿ ಎಂಬ ಸುರಕ್ಷತೆಯ ವಾಲ್‌ಗಳ ಮುಖೇನ ಹಂತ ಹಂತವಾಗಿ ಗ್ಯಾಸ್ ಲೀಕ್ ಮಾಡುತ್ತದೆ. ಹೀಗಾಗಿ ಸಾರ್ವಜನಿಕರು ಯಾರು ಆತಂಕ ಪಡಬೇಕಾಗಿಲ್ಲಾ ಎಂದರು.

ಇದನ್ನೂ ಓದಿ: Leopard attack : ರಾಯಚೂರಿನಲ್ಲಿ ಮೂವರ ಮೇಲೆ ದಾಳಿ ಮಾಡಿ ಕಾಲ್ಕಿತ್ತ ಚಿರತೆ!

Continue Reading

ಕ್ರೈಂ

Child Abandon: ಮೂರು ತಿಂಗಳ ಮಗು ಬಿಟ್ಟು ತಾಯಿ ಪರಾರಿ

Child Abandon: ಮಗುವಿನ ಅಳುವಿನ ಶಬ್ದ ಕೇಳಿ ಆಶಾ ಕಾರ್ಯಕರ್ತೆಯೊಬ್ಬರು ಮಗುವನ್ನ ರಕ್ಷಿಸಿದ್ದಾರೆ. ರಾತ್ರಿ ಊಟ ಮಾಡಿ ವಾಕಿಂಗ್ ಮಾಡುತ್ತಿದ್ದ ಆಶಾ ಕಾರ್ಯಕರ್ತೆ ಕಲಾವತಿ ಅವರಿಗೆ ರಸ್ತೆ ಬದಿಯಲ್ಲಿ ಅಳುತ್ತಿದ್ದ ಮಗುವಿನ ಶಬ್ದ ಕೇಳಿಸಿತ್ತು. ಸ್ಥಳಕ್ಕೆ ಹೋದಾಗ, ಮೂರು ತಿಂಗಳ ಮಗುವನ್ನು ಬಿಟ್ಟು ಹೋಗಿರುವುದು ಬೆಳಕಿಗೆ ಬಂದಿದೆ.

VISTARANEWS.COM


on

child abandon
Koo

ತುಮಕೂರು: ತಾಯಿಯೊಬ್ಬಳು (mother) ರಸ್ತೆ ಬದಿಯಲ್ಲಿ ಮೂರು ತಿಂಗಳ ಮಗುವನ್ನು ಅನಾಥವಾಗಿ (Child abandon) ಬಿಟ್ಟು ಹೋಗಿರುವ ಪ್ರಕರಣ ತುಮಕೂರು (Tumkur news) ಜಿಲ್ಲೆ ತಿಪಟೂರು ತಾಲೂಕಿನ ಹೆಡಗರಹಳ್ಳಿ ಗ್ರಾಮದಲ್ಲಿ ನಡೆದಿದೆ.

ಮಗುವಿನ ಅಳುವಿನ ಶಬ್ದ ಕೇಳಿ ಆಶಾ ಕಾರ್ಯಕರ್ತೆಯೊಬ್ಬರು ಮಗುವನ್ನ ರಕ್ಷಿಸಿದ್ದಾರೆ. ರಾತ್ರಿ ಊಟ ಮಾಡಿ ವಾಕಿಂಗ್ ಮಾಡುತ್ತಿದ್ದ ಆಶಾ ಕಾರ್ಯಕರ್ತೆ ಕಲಾವತಿ ಅವರಿಗೆ ರಸ್ತೆ ಬದಿಯಲ್ಲಿ ಅಳುತ್ತಿದ್ದ ಮಗುವಿನ ಶಬ್ದ ಕೇಳಿಸಿತ್ತು. ಸ್ಥಳಕ್ಕೆ ಹೋದಾಗ, ಮೂರು ತಿಂಗಳ ಮಗುವನ್ನು ಬಿಟ್ಟು ಹೋಗಿರುವುದು ಬೆಳಕಿಗೆ ಬಂದಿದೆ.

ಕೂಡಲೇ ನೊಣವಿನಕೆರೆ ಪೊಲೀಸರಿಗೆ ಆಶಾ ಕಾರ್ಯಕರ್ತೆ ಕಲಾವತಿ ಮಾಹಿತಿ ನೀಡಿದ್ದಾರೆ. ಆಂಬ್ಯುಲೆನ್ಸ್ ಮೂಲಕ ತಿಪಟೂರು ಸಾರ್ವಜನಿಕ ಆಸ್ಪತ್ರೆಗೆ ಮಗು ಕರೆದೊಯ್ಯಲಾಗಿದೆ. ವೈದ್ಯರು ಮಗುವಿನ ಆರೋಗ್ಯ ತಪಾಸಣೆ ನಡೆಸಿದ್ದು, ಆರೋಗ್ಯವಾಗಿರುವ ಮಗು 4.5 ಕೆಜಿಯಷ್ಟು ತೂಕವಿದೆ. ನೊಣವಿನಕೆರೆ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಮಗುವಿನ ಪೋಷಕರ ಪತ್ತೆಗೆ ಪೊಲೀಸರು ಮುಂದಾಗಿದ್ದಾರೆ.

ಬೆಂಗಳೂರಿನಲ್ಲಿ ಎಟಿಎಂಗಳ ದರೋಡೆ

ಬೆಂಗಳೂರು: ಬೆಂಗಳೂರಿನಲ್ಲಿ ಕೆಲವು ವಾರಗಳಿಂದ ಸಕ್ರಿಯವಾಗಿರುವ ಎಟಿಎಂ ಕಳ್ಳರ (ATM theft) ಗ್ಯಾಂಗ್ ಬಗ್ಗೆ ಪೊಲೀಸರು ಇದೀಗ ತಲೆಕೆಡಿಸಿಕೊಂಡಿದ್ದಾರೆ. ಹರ್ಯಾಣ ಮೂಲದ ಎರಡು ಗ್ಯಾಂಗ್‌ಗಳು ಸತತವಾಗಿ ಎಟಿಎಂಗಳಿಂದ ಹಣ (Robbery Case) ಎತ್ತುತ್ತಿವೆ. ಗುರುತೇ ಸಿಗದಂತೆ ದರೋಡೆ ಮಾಡುತ್ತಿರುವ ಈ ಗ್ಯಾಂಗ್‌ಗಳು ಪೊಲೀಸರಿಗೆ ತಲೆನೋವಾಗಿವೆ.

ಬೆಳ್ಳಂದೂರು ಠಾಣೆ ವ್ಯಾಪ್ತಿಯ ಎಕ್ಸಿಸ್ ಬ್ಯಾಂಕ್ ಎಟಿಎಂನಿಂದ ನಿನ್ನೆ ಕಳ್ಳತನ ಮಾಡಲಾಗಿದೆ. ಇಕೋ ಎರ್ಟಿಗಾ ಕಾರ್‌ನಲ್ಲಿ ಬಂದು ಕಳವು ಮಾಡಲಾಗಿದೆ. ಪರಿಶೀಲಿಸಿದಾಗ ಕಾರು ಕೂಡ ಕಳವು ಮಾಲು ಎಂಬುದು ಗೊತ್ತಾಗಿದೆ. ಆರೋಪಿಗಳು ಮೈಮೇಲೆ ಹೊದಿಕೆ ಹೊದ್ದುಕೊಂಡು ಎಟಿಎಂ ಒಳಗೆ ಹೋಗಿ ಕೃತ್ಯ ನಡೆಸುತ್ತಿದ್ದಾರೆ. ಹೀಗಾಗಿ ಇವರು ಗುರುತು ಕಾಣಿಸದಾಗಿದೆ.

ಇವರ ಖತರ್‌ನಾಕ್‌ ಬುದ್ಧಿ ಒಂದೆರಡಲ್ಲ. ಕಳ್ಳತನ ವೇಳೆ ಎಟಿಎಂನಲ್ಲಿರುವ ಸಿಸಿಟಿವಿ ಕ್ಯಾಮೆರಾ ಲೆನ್ಸ್‌ಗೆ ಕಪ್ಪು ಪೇಂಟ್‌ ಬಳಿಯುತ್ತಾರೆ. ಅಲ್ಲಿಗೆ ಅದೂ ಮಟಾಶ್.‌ ಬಳಿಕ ಗ್ಯಾಸ್ ಕಟರ್ ಬಳಸಿ ಎಟಿಎಂ ಓಪನ್ ಮಾಡಿ ಲಕ್ಷಾಂತರ ರೂಪಾಯಿ ಹಣ ದರೋಡೆ ಮಾಡುತ್ತಾರೆ. ಬೆಳ್ಳಂದೂರಿನಲ್ಲಿ ಜೂ. 6ರಂದು ಬೆಳಗಿನ ಜಾವ 3.30ಕ್ಕೆ ಕೃತ್ಯ ನಡೆಸಲಾಗಿದೆ. ಸದ್ಯ ಸಿಸಿಟಿವಿಯಲ್ಲಿ ಆರೋಪಿಗಳ ಕೃತ್ಯ ಸೆರೆಯಾಗಿದೆ.

ಈ ಸಂಬಂಧ ಏಜೆನ್ಸಿ ಸಿಬ್ಬಂದಿ ಕಿರಣ್ ಎಂಬುವವರಿಂದ ದೂರು ದಾಖಲಾಗಿದೆ. ಬೆಳ್ಳಂದೂರು ಠಾಣೆಯಲ್ಲಿ ಎಫ್ ಐಆರ್ ದಾಖಲಾಗಿದೆ. ಆರೋಪಿಗಳ ಪತ್ತೆಗೆ ಪೊಲೀಸರು ಬಲೆ ಬೀಸಿದ್ದು, ಪ್ರತಿನಿತ್ಯ ರಾತ್ರಿ ವೇಳೆ ನಗರದ ಎಟಿಎಂಗಳ ಸುತ್ತಮುತ್ತಲೂ ಹೆಚ್ಚಾಗಿ ಗಸ್ತಿಗೆ ಹಿರಿಯ ಅಧಿಕಾರಿಗಳು ಸಿಬ್ಬಂದಿಗಳಿಗೆ ಸೂಚನೆ ನೀಡಿದ್ದಾರೆ.

ಕಾರಿನ ಮೇಲೆ ಕಾಡಾನೆ ದಾಳಿ, ಕುಟುಂಬ ಪಾರು

ಕೊಡಗು: ಮಲೆನಾಡು ಭಾಗದಲ್ಲಿ ಕಾಡಾನೆಗಳ (Wild animal attack) ಉಪಟಳ ಹೆಚ್ಚಾಗುತ್ತಿದ್ದು, ಕೊಡಗಿನಲ್ಲಿ ಕಾರಿನ ಮೇಲೆ ಕಾಡಾನೆ ದಾಳಿ (Elephant attack) ನಡೆಸಿದೆ. ಕಾರಿನೊಳಗೆ ಇದ್ದ ಕುಟುಂಬವೊಂದು ಕೂದಲೆಳೆಯ ಅಂತರದಿಂದ ಪಾರಾಗಿದ್ದಾರೆ. ವೀರಾಜಪೇಟೆಯ ಯಶವಂತ್ ಅವರ ಕುಟುಂಬವು ಕಾಡಾನೆ ದಾಳಿಯಿಂದ ಪಾರಾಗಿದ್ದಾರೆ.

ಯಶವಂತ್‌ ತಮ್ಮ ಕುಟುಂಬದೊಂದಿಗೆ ಟಿ.ಶೆಟ್ಟಿಗೇರಿಯಿಂದ ಇರ್ಪು ಕಡೆ ತೆರಳುತ್ತಿದ್ದಳು. ಈ ವೇಳೆ ಪೊನ್ನಂಪೇಟೆ ತಾಲೂಕಿನ ಕುರ್ಚಿ ಗ್ರಾಮದಲ್ಲಿ ಅಡ್ಡಗಟ್ಟಿದ ಆನೆಯು ಏಕಾಏಕಿ ದಾಳಿ ಮಾಡಿದೆ. ಆನೆ ಹತ್ತಿರ ಬರುತ್ತಿದ್ದಂತೆ ಕಾರಿನಿಂದ ಇಳಿದು ಓಡಿದ್ದಾರೆ. ಈ ವೇಳೆ ಆನೆಯು ಕಾರು ಜಖಂಗೊಳಿಸಿದೆ. ಇಬ್ಬರು ಮಕ್ಕಳು ಸೇರಿದಂತೆ ಕಾರಿನಲ್ಲಿದ್ದ ನಾಲ್ವರು ಪ್ರಾಣಪಾಯದಿಂದ ಪಾರಾಗಿದ್ದಾರೆ. ಕಾಡಾನೆ ಹಾವಳಿಗೆ ಅರಣ್ಯ ಇಲಾಖೆ ವಿರುದ್ಧ ಗ್ರಾಮಸ್ಥರು ಆಕ್ರೋಶ ಹೊರಹಾಕಿದ್ದಾರೆ. ಪ್ರತಿನಿತ್ಯ ಗ್ರಾಮದಲ್ಲಿ ಕಾಡಾನೆಗಳು ಅಡ್ಡಾಡುತ್ತಿದ್ದರೂ ಸೆರೆಹಿಡಿಯದೆ ಸುಮ್ಮನಿದ್ದಾರೆ ಎಂದು ಅಸಮಾಧಾನ ಹೊರಹಾಕಿದರು.

ಇದನ್ನೂ ಓದಿ: Wild Animals Attack: ವಿಜಯನಗರ: ನಾಡಿಗೆ ನುಗ್ಗಿದ ಕರಡಿಯನ್ನು ರಾತ್ರೋರಾತ್ರಿ ಕಾಡಿಗೆ ಅಟ್ಟಿದ ಅರಣ್ಯ ಇಲಾಖೆ ಸಿಬ್ಬಂದಿ

Continue Reading
Advertisement
Actor Darshan Lost KG In 25 Days
ಕ್ರೈಂ7 mins ago

Actor Darshan: 25 ದಿನಕ್ಕೆ ದರ್ಶನ್‌ ತೂಕ ಕಳೆದುಕೊಂಡಿದ್ದು ಇಷ್ಟೊಂದಾ?

road accident vijayapura
ವಿಜಯಪುರ17 mins ago

Road Accident: ಬಸ್‌ ಹರಿದು ವ್ಯಕ್ತಿ ಸಾವು; ಮರಳೇಕಾಯಿ ತಿಂದು 8 ಮಕ್ಕಳು ಅಸ್ವಸ್ಥ

Virat kohli
ಪ್ರಮುಖ ಸುದ್ದಿ20 mins ago

Virat Kohli : ಇನ್​ಸ್ಟಾಗ್ರಾಮ್ ಪೋಸ್ಟ್​ ಮೂಲಕ ಬಿಟಿಎಸ್​ ಬ್ಯಾಂಡ್​ನ ದಾಖಲೆ ಮುರಿದ ವಿರಾಟ್​ ಕೊಹ್ಲಿ

Period Insomnia
ಆರೋಗ್ಯ30 mins ago

Period Insomnia: ಋತುಸ್ರಾವ ಸಮಯದಲ್ಲಿ ನಿದ್ದೆಯ ಸಮಸ್ಯೆಯೇ?; ಇಲ್ಲಿವೆ ಸರಳ ಟಿಪ್ಸ್‌ಗಳು

Kundapura Kannada This time Kundapura Kannada Festival at the palace grounds Here is the list of program
ಉಡುಪಿ41 mins ago

Kundapura Kannada:  ಅರಮನೆ ಮೈದಾನದಲ್ಲಿ ಈ ಬಾರಿ `ವಿಶ್ವ ಕುಂದಾಪುರ ಕನ್ನಡ ಹಬ್ಬ’; ಕಾರ್ಯಕ್ರಮದ ವಿವರ ಪಟ್ಟಿ ಇಲ್ಲಿದೆ!

swamiji death kalaburagi viraktha math
ಕಲಬುರಗಿ43 mins ago

Swamiji Death: ವಿರಕ್ತ ಮಠದ ಶ್ರೀ ಸಿದ್ದರಾಮ ಮಹಾಸ್ವಾಮಿ ವಿಧಿವಶ

Smriti Mandhana
ಕ್ರಿಕೆಟ್46 mins ago

Smriti Mandhana : ಬಾಯ್​ಫ್ರೆಂಡ್​ ಜತೆಗಿನ ಐದು ವರ್ಷಗಳ ಬಾಂಧವ್ಯವನ್ನು ಕೇಕ್​ ಕಟ್​ ಮಾಡುವ ಮೂಲಕ ಸಂಭ್ರಮಿಸಿದ ಸ್ಮೃತಿ ಮಂದಾನಾ

child abandon
ಕ್ರೈಂ55 mins ago

Child Abandon: ಮೂರು ತಿಂಗಳ ಮಗು ಬಿಟ್ಟು ತಾಯಿ ಪರಾರಿ

Chandan Shetty talk about future decision
ಸ್ಯಾಂಡಲ್ ವುಡ್1 hour ago

Chandan Shetty: ಚಂದನ್‌ ಶೆಟ್ಟಿಗೆ ಒಳ್ಳೆ ಹುಡುಗಿ ಜತೆ ಮದುವೆಯಾಗುವ ಕನಸು ಏನೋ ಇತ್ತಂತೆ ಆದರೆ….

Mumbai rain
ಪ್ರಮುಖ ಸುದ್ದಿ1 hour ago

Mumbai Rain : ಭಾನುವಾರ ರಾತ್ರಿ ಪೂರ್ತಿ ಸುರಿದ ಮಳೆಗೆ ಮುಂಬೈ ನಗರದ ಹಲವು ಪ್ರದೇಶಗಳು ಜಲಾವೃತ

Sharmitha Gowda in bikini
ಕಿರುತೆರೆ9 months ago

Geetha Serial Kannada: ನಿದ್ದೆ ಕದ್ದ ಚೋರಿ! ನಟಿ `ಭಾನುಮತಿ’ ಹಾಟ್‌ ಪೋಟೊಗಳಿಗೆ ಫ್ಯಾನ್ಸ್ ಫುಲ್ ಫಿದಾ

Kannada Serials
ಕಿರುತೆರೆ9 months ago

Kannada Serials TRP: 2ನೇ ಸ್ಥಾನದಲ್ಲಿ 2 ಧಾರಾವಾಹಿಗಳು; ಟಿಆರ್‌ಪಿ ರೇಸ್‌ನಲ್ಲಿಲ್ಲ ಭಾಗ್ಯಲಕ್ಷ್ಮೀ!

Bigg Boss- Saregamapa 20 average TRP
ಕಿರುತೆರೆ9 months ago

Kannada Serials TRP: ಏಳನೇ ಸ್ಥಾನಕ್ಕೆ ʻಅಮೃತಧಾರೆʼ ಕುಸಿತ; ಬಿಗ್‌ ಬಾಸ್‌-ಸರಿಗಮಪ ಟಿಆರ್‌ಪಿ ಎಷ್ಟು?

galipata neetu
ಕಿರುತೆರೆ7 months ago

Kanyadana Serial: ಕಿರುತೆರೆಗೆ ಮತ್ತೆ ಎಂಟ್ರಿ ಕೊಟ್ಟ ʻಗಾಳಿಪಟʼ ಖ್ಯಾತಿಯ ʻನೀತುʼ!

Kannada Serials
ಕಿರುತೆರೆ9 months ago

Kannada Serials TRP: ನಾಲ್ಕನೇ ಸ್ಥಾನಕ್ಕೆ ಕುಸಿತ ಕಂಡ ʻಸೀತಾ ರಾಮʼ; ಟಿಆರ್‌ಪಿ ರೇಸ್‌ಗೆ ʻಭಾಗ್ಯಲಕ್ಷ್ಮಿʼ ಬ್ಯಾಕ್‌!

Kannada Serials
ಕಿರುತೆರೆ9 months ago

Kannada Serials TRP: ಟಿಆರ್‌ಪಿಯಲ್ಲಿ ʻಭಾಗ್ಯಲಕ್ಷ್ಮೀʼ ಹವಾ; ʻಪುಟ್ಟಕ್ಕನ ಮಕ್ಕಳುʼ ಧಾರಾವಾಹಿಗೆ ಸಂಕಷ್ಟ!

Bigg Boss' dominates TRP; Sita Rama fell to the sixth position
ಕಿರುತೆರೆ8 months ago

Kannada Serials TRP: ಟಿಆರ್‌ಪಿಯಲ್ಲಿ ʻಬಿಗ್ ಬಾಸ್ʼದೇ ಮೇಲುಗೈ; 6ನೇ ಸ್ಥಾನಕ್ಕೆ ಕುಸಿದ ʻಸೀತಾ ರಾಮʼ

geetha serial Dhanush gowda engagement
ಕಿರುತೆರೆ7 months ago

Dhanush Gowda: ಗೀತಾ ಧಾರಾವಾಹಿ ನಟನ ನಿಶ್ಚಿತಾರ್ಥ; ಭವ್ಯಾಳ ಕಮೆಂಟ್‌ ಬಾಕ್ಸ್‌ ಆಫ್‌!

varun
ಕಿರುತೆರೆ8 months ago

Brindavana Serial: ʼಬೃಂದಾವನʼ ಧಾರಾವಾಹಿಯಲ್ಲಿ ದೊಡ್ಡ ಟ್ವಿಸ್ಟ್‌; ಪ್ರಮುಖ ಪಾತ್ರಧಾರಿಯೇ ಬದಲು

Kannada Serials
ಕಿರುತೆರೆ10 months ago

Kannada Serials TRP: ಟಿಆರ್‌ಪಿಯಲ್ಲಿ ಏರಿಕೆ ಕಂಡ ʻಅಮೃತಧಾರೆʼ; ʻಗಟ್ಟಿಮೇಳʼಕ್ಕೆ ನಾಲ್ಕನೇ ಸ್ಥಾನ!

karnataka weather Forecast
ಮಳೆ14 hours ago

Karnataka weather : ನಾಳೆ ಭಾರಿ ಮಳೆ ಎಚ್ಚರಿಕೆ; ಕರಾವಳಿಯ ಈ ಶಾಲಾ-ಕಾಲೇಜುಗಳಿಗೆ ರಜೆ

Davanagere news
ಮಳೆ16 hours ago

Davanagere News : ಆ ಗ್ರಾಮಕ್ಕೆ ಕಾಲಿಡದ ವರುಣ! ಮಳೆಗಾಗಿ ಗ್ರಾಮಸ್ಥರಿಂದ ಕಂತೆ ಭಿಕ್ಷೆ

Karnataka Rain
ಮಳೆ17 hours ago

Karnataka Rain : ವೀಕೆಂಡ್‌ನಲ್ಲಿ ಸಿಲಿಕಾನ್‌ ಸಿಟಿಯಲ್ಲಿ ಮಳೆ ಮೋಡಿ; ಮತ್ತೆ ಗುಡ್ಡ ಕುಸಿತ ಶುರು

karnataka weather Forecast
ಮಳೆ1 day ago

Karnataka Weather : ವೇಗವಾಗಿ ಬೀಸುವ ಗಾಳಿ ಜತೆಗೆ ಅಬ್ಬರಿಸಲಿದೆ ಮಳೆ; ಈ ಜಿಲ್ಲೆಗಳಿಗೆ ಎಚ್ಚರಿಕೆ

karnataka weather Forecast
ಮಳೆ2 days ago

Karnataka Weather : ಚಾರಣಪ್ರಿಯರಿಗೆ ಶಾಕ್‌; ಭಾರಿ ಮಳೆಯಿಂದಾಗಿ ಈ ಜಾಗಗಳಿಗೆ ಟ್ರೆಕ್ಕಿಂಗ್‌ ನಿಷೇಧ

Murder case
ಯಾದಗಿರಿ2 days ago

Murder case : ಯಾದಗಿರಿಯಲ್ಲಿ ಹಸುಗೂಸನ್ನು ಬಾವಿಗೆ ಎಸೆದು ಕೊಂದರು ಹಂತಕರು

karnataka Rain
ಮಳೆ2 days ago

Karnataka Rain : ಭಾರಿ ಗಾಳಿ- ಮಳೆಗೆ ಹಾರಿದ ಅಂಗಡಿಯ ತಗಡು; ಮಾಗುಂಡಿ-ಬಾಳೆಹೊನ್ನೂರು ಮಾರ್ಗ ಬಂದ್

Food Poisoning
ರಾಯಚೂರು2 days ago

Food Poisoning : ಮೊರಾರ್ಜಿ ವಸತಿ ಶಾಲೆ ಅವ್ಯವಸ್ಥೆ; ಊಟ ಸೇವಿಸಿದ 25ಕ್ಕೂ ಹೆಚ್ಚು ವಿದ್ಯಾರ್ಥಿಗಳು ಅಸ್ವಸ್ಥ

Wild Animal Attack Elephant attack
ರಾಮನಗರ2 days ago

Wild Animal Attack : ತೋಟದಲ್ಲಿ ನೀರು ಹಾಯಿಸುತ್ತಿದ್ದವನ ತುಳಿದು ಸಾಯಿಸಿದ ಆನೆ

karnataka Weather Forecast
ಮಳೆ2 days ago

Karnataka Weather : ಕರಾವಳಿ, ಮಲೆನಾಡಿನಲ್ಲಿ ಇಂದು ನಾನ್‌ ಸ್ಟಾಪ್‌ ಮಳೆ; ಬೆಂಗಳೂರಲ್ಲಿ ಹೇಗೆ?

ಟ್ರೆಂಡಿಂಗ್‌