Nitin Gadkari: ಬಾವಿಗೆ ಬೇಕಾದರೂ ಬೀಳುವೆ, ಕಾಂಗ್ರೆಸ್‌ ಸೇರಲ್ಲ! ಪಕ್ಷಕ್ಕೆ ಬನ್ನಿ ಎಂದವರಿಗೆ ನಿತಿನ್ ಗಡ್ಕರಿ ಖಡಕ್ ಉತ್ತರ - Vistara News

ದೇಶ

Nitin Gadkari: ಬಾವಿಗೆ ಬೇಕಾದರೂ ಬೀಳುವೆ, ಕಾಂಗ್ರೆಸ್‌ ಸೇರಲ್ಲ! ಪಕ್ಷಕ್ಕೆ ಬನ್ನಿ ಎಂದವರಿಗೆ ನಿತಿನ್ ಗಡ್ಕರಿ ಖಡಕ್ ಉತ್ತರ

Nitin Gadkari: ನಿತಿನ್‌ ಗಡ್ಕರಿ ಪಕ್ಕಾ ಬಿಜೆಪಿಗರು. ಆದರೂ, ಅವರಿಗೆ ಕಾಂಗ್ರೆಸ್‌ ಒಮ್ಮೆ ಆಫರ್‌ ನೀಡಿತ್ತು. ಆಗ ಕೇಂದ್ರ ಸಚಿವ ನೀಡಿದ ಪ್ರತಿಕ್ರಿಯೆಯನ್ನು ಈಗ ಅವರೇ ಸ್ಮರಿಸಿದ್ದಾರೆ.

VISTARANEWS.COM


on

Nitin Gadkari
ಮಹತ್ವದ, ಕುತೂಹಲಕರ ಸುದ್ದಿಗಾಗಿ ಫಾಲೊ ಮಾಡಿ
Koo

ನಾಗ್ಪುರ: ಕೇಂದ್ರ ರಸ್ತೆ ಸಾರಿಗೆ ಹಾಗೂ ಹೆದ್ದಾರಿ ಸಚಿವ ನಿತಿನ್‌ ಗಡ್ಕರಿ ಅವರು ಕಟ್ಟಾ ಬಿಜೆಪಿಗರು. ಅಟಲ್‌ ಬಿಹಾರಿ ವಾಜಪೇಯಿ ಅವರ ಕಾಲದಿಂದಲೂ ಬಿಜೆಪಿಯಲ್ಲಿ ಉನ್ನತ ಸ್ಥಾನದಲ್ಲಿರುವ ಅವರು, ಪಕ್ಷದ ರಾಷ್ಟ್ರೀಯ ಅಧ್ಯಕ್ಷರೂ ಆಗಿದ್ದರು. ಕಳೆದ ಒಂಬತ್ತು ವರ್ಷದಿಂದ ಕೇಂದ್ರ ಸಾರಿಗೆ ಸಚಿವರಾಗಿರುವ ಅವರು, ರಾಷ್ಟ್ರೀಯ ಹೆದ್ದಾರಿಗಳಿಗೆ ಹೊಸ ರೂಪ ಕೊಟ್ಟಿದ್ದಾರೆ. ‘ಹೈವೇ ಮ್ಯಾನ್‌ ಆಫ್‌ ಇಂಡಿಯಾ’ ಎಂದೇ ಖ್ಯಾತಿಯಾಗಿದ್ದಾರೆ. ಇಷ್ಟೆಲ್ಲ ಉನ್ನತ ಸ್ಥಾನ ಅಲಂಕರಿಸಿರುವ ನಿತಿನ್‌ ಗಡ್ಕರಿ (Nitin Gadkari) ಅವರಿಗೆ ಪಕ್ಷ ಸೇರುವಂತೆ ಕಾಂಗ್ರೆಸ್‌ ಆಫರ್‌ ನೀಡಿತ್ತಂತೆ. ಆಗ ಅವರು ನೀಡಿದ ಪ್ರತಿಕ್ರಿಯೆಯನ್ನು ಈಗ ಗಡ್ಕರಿ ಅವರೇ ಸ್ಮರಿಸಿದ್ದಾರೆ.

ನರೇಂದ್ರ ಮೋದಿ ನೇತೃತ್ವದ ಕೇಂದ್ರ ಸರ್ಕಾರ ಅಧಿಕಾರಕ್ಕೆ ಬಂದು 9 ವರ್ಷ ತುಂಬಿದ ಹಿನ್ನೆಲೆಯಲ್ಲಿ ಮಹಾರಾಷ್ಟ್ರದಲ್ಲಿ ಆಯೋಜಿಸಿದ್ದ ಕಾರ್ಯಕ್ರಮವೊಂದರಲ್ಲಿ ಮಾತನಾಡಿದ ಅವರು ಕಾಂಗ್ರೆಸ್‌ ಆಫರ್‌ ಕುರಿತು ಪ್ರಸ್ತಾಪಿಸಿದರು. “ಕಾಂಗ್ರೆಸ್‌ ನಾಯಕರಾದ ಶ್ರೀಕಾಂತ್‌ ಜಿಚ್ಕರ್‌ ಅವರು ನನಗೆ ಒಮ್ಮೆ ಆಫರ್‌ ಕೊಟ್ಟಿದ್ದರು. ನೀವು ಪಕ್ಷದ ನಿಷ್ಠಾವಂತ ಕಾರ್ಯಕರ್ತರು. ಕಾಂಗ್ರೆಸ್‌ಗೆ ಬಂದರೆ ನಿಮಗೆ ಒಳ್ಳೆಯ ಭವಿಷ್ಯವಿದೆ ಎಂಬುದಾಗಿ ಆಹ್ವಾನ ನೀಡಿದರು” ಎಂದು ಗಡ್ಕರಿ ಸ್ಮರಿಸಿದರು.

“ಶ್ರೀಕಾಂತ್‌ ಜಿಚ್ಕರ್‌ ಅವರ ಆಫರ್‌ಗೆ ನಾನು ಪ್ರತಿಕ್ರಿಯಿಸಿದೆ. ಬಾವಿಗೆ ಬೀಳು ಎಂದರೆ ಬಿದ್ದುಬಿಡುತ್ತೇನೆ. ಆದರೆ, ಕಾಂಗ್ರೆಸ್‌ ಪಕ್ಷವನ್ನು ಮಾತ್ರ ಸೇರುವುದಿಲ್ಲ. ನಾನು ಬಿಜೆಪಿಯಲ್ಲಿ ಅಪಾರ ನಂಬಿಕೆ ಇಟ್ಟಿದ್ದೇನೆ ಹಾಗೂ ಬಿಜೆಪಿ ಸಿದ್ಧಾಂತಗಳು ನನ್ನನ್ನು ಆಕರ್ಷಿಸಿವೆ. ಹಾಗಾಗಿ, ಬಿಜೆಪಿಗಾಗಿ ನಾನು ಶ್ರಮಿಸುತ್ತೇನೆ” ಎಂಬುದಾಗಿ ಉತ್ತರಿಸಿದೆ ಎಂದು ಕಾರ್ಯಕ್ರಮದಲ್ಲಿ ಹೇಳಿದರು.

ಇದನ್ನೂ ಓದಿ: ಸೇವೆಗೆ ಮತ ಸಿಗುತ್ತದೆಯೇ ಹೊರತು ಪೋಸ್ಟರ್‌ಗಲ್ಲ; ಮುಂದಿನ ಚುನಾವಣೆಯಲ್ಲಿ ನಾನು ಜನರಿಗೆ ಟೀ ಕೂಡ ಕುಡಿಸಲ್ಲ: ಗಡ್ಕರಿ

“ನನ್ನಲ್ಲಿ ರಾಷ್ಟ್ರೀಯ ಸ್ವಯಂ ಸೇವಕ ಸಂಘವು ಮೌಲ್ಯಗಳನ್ನು ತುಂಬಿದೆ. ಅದರಂತೆ ನಾನು ಕಾರ್ಯನಿರ್ವಹಿಸುತ್ತಿದ್ದೇನೆ. ಪ್ರಧಾನಿ ನರೇಂದ್ರ ಮೋದಿ ಅವರಿಗೆ ಉತ್ಕೃಷ್ಟ ಗುರಿಗಳಿವೆ, ದೂರದೃಷ್ಟಿ ಇದೆ. ದೇಶವು ಆರ್ಥಿಕವಾಗಿ ಸೂಪರ್‌ ಪವರ್‌ ರಾಷ್ಟ್ರವಾಗಿ ಹೊರಹೊಮ್ಮಲಿದೆ. ಈ ದೇಶದ ಭವಿಷ್ಯವು ಉಜ್ವಲವಾಗಿದೆ. ಹಾಗಂತ ನಾವು ದೇಶದ ಪ್ರಜಾಪ್ರಭುತ್ವದ ಇತಿಹಾಸವನ್ನು ಮರೆಯಬಾರದು. ಭೂತವನ್ನು ಅರಿತುಕೊಂಡು ಭವಿಷ್ಯ ರೂಪಿಸಿಕೊಳ್ಳಬೇಕು. ಗರೀಬಿ ಹಠಾವೋ ಎಂದು ಕಾಂಗ್ರೆಸ್‌ ಘೋಷಿಸಿತು. ಆದರೆ, ವೈಯಕ್ತಿಕ ಲಾಭಕ್ಕಾಗಿ ಸಾಲು ಸಾಲು ಶಿಕ್ಷಣ ಸಂಸ್ಥೆಗಳನ್ನು ತೆರೆಯಿತು” ಎಂದು ಟೀಕಿಸಿದರು.

ದೇಶದ ಮತ್ತಷ್ಟು ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್‌ ಮಾಡಿ

ಕ್ಷಣ ಕ್ಷಣದ ಮಾಹಿತಿಗಾಗಿ Vistara News FaceBook ಪೇಜ್ ಫಾಲೋ ಮಾಡಿ
ಮಹತ್ವದ ಮಾಹಿತಿಗಾಗಿ ವಿಸ್ತಾರ ನ್ಯೂಸ್ ಆ್ಯಪ್ ಉಚಿತವಾಗಿ ಡೌನ್ ಲೋಡ್ ಮಾಡಿಕೊಳ್ಳಿ: Andriod App | IOS App
Continue Reading
Click to comment

Leave a Reply

Your email address will not be published. Required fields are marked *

ದೇಶ

Parliament Session 2024: ಜೂನ್‌ 24ರಿಂದ ಸಂಸತ್‌ ವಿಶೇಷ ಅಧಿವೇಶನ; ಸ್ಪೀಕರ್‌ ಆಯ್ಕೆ ಸೇರಿ ಏನೆಲ್ಲ ತೀರ್ಮಾನ?

Parliament Session 2024: ಜೂನ್‌ 24 ಹಾಗೂ ಜೂನ್‌ 25ರಂದು ನೂತನ ಸಂಸದರು ಪ್ರಮಾಣವಚನ ಸ್ವೀಕರಿಸಲಿದ್ದಾರೆ. ಜೂನ್‌ 26ರಂದು ಲೋಕಸಭೆ ಸ್ಪೀಕರ್‌ ಆಯ್ಕೆಗೆ ಚುನಾವಣೆ ನಡೆಯಲಿದೆ ಎಂದು ಮೂಲಗಳು ತಿಳಿಸಿವೆ. ಒಟ್ಟು 8 ದಿನಗಳವರೆಗೆ ವಿಶೇಷ ಅಧಿವೇಶನ ನಡೆಯಲಿದೆ.

VISTARANEWS.COM


on

Parliament Session 2024
Koo

ನವದೆಹಲಿ: ಬಿಜೆಪಿ ನೇತೃತ್ವದ ಎನ್‌ಡಿಎ ಮೈತ್ರಕೂಟವು ಸ್ಪಷ್ಟ ಬಹುಮತದೊಂದಿಗೆ ಸರ್ಕಾರ ರಚಿಸಿದೆ. ನರೇಂದ್ರ ಮೋದಿ (Narendra Modi) ಅವರು ಸತತ ಮೂರನೇ ಬಾರಿಗೆ ಪ್ರಧಾನಿಯಾಗಿ ಪ್ರಮಾಣವಚನ ಸ್ವೀಕರಿಸಿದ ಬೆನ್ನಲ್ಲೇ 71 ಸಚಿವರಿಗೆ ಖಾತೆ ಹಂಚಿಕೆ ಮಾಡಿದ್ದಾರೆ. ಇದರ ಬೆನ್ನಲ್ಲೇ, ಜೂನ್‌ 24ರಿಂದ ಜುಲೈ 3ರವರೆಗೆ ಸಂಸತ್ ವಿಶೇಷ ಅಧಿವೇಶನ (Parliament Session 2024) ಕರೆಯಲಾಗಿದೆ. ವಿಶೇಷ ಅಧಿವೇಶನದಲ್ಲಿ ಲೋಕಸಭೆ ಸ್ಪೀಕರ್‌ ಆಯ್ಕೆ ಸೇರಿ ಹಲವು ತೀರ್ಮಾನಗಳನ್ನು ತೆಗೆದುಕೊಳ್ಳಲಾಗುತ್ತದೆ ಎಂದು ತಿಳಿದುಬಂದಿದೆ.

ಜೂನ್‌ 24ರಿಂದ ಸಂಸತ್‌ ವಿಶೇಷ ಅಧಿವೇಶನ ಆರಂಭವಾಗುತ್ತದೆ. ಜೂನ್‌ 24 ಹಾಗೂ ಜೂನ್‌ 25ರಂದು ನೂತನ ಸಂಸದರು ಪ್ರಮಾಣವಚನ ಸ್ವೀಕರಿಸಲಿದ್ದಾರೆ. ಜೂನ್‌ 26ರಂದು ಲೋಕಸಭೆ ಸ್ಪೀಕರ್‌ ಆಯ್ಕೆಗೆ ಚುನಾವಣೆ ನಡೆಯಲಿದೆ ಎಂದು ಮೂಲಗಳು ತಿಳಿಸಿವೆ. ಒಟ್ಟು 8 ದಿನಗಳವರೆಗೆ ವಿಶೇಷ ಅಧಿವೇಶನ ನಡೆಯಲಿದೆ ಎಂದು ತಿಳಿದುಬಂದಿದೆ. ಆದಾಗ್ಯೂ, ಯಾವುದೇ ವಿಧೇಯಕಗಳ ಮಂಡನೆ ಕುರಿತು ಮಾಹಿತಿ ಲಭ್ಯವಾಗಿಲ್ಲ.

Parliament Winter session will held from December 4 to 22

ಖಾತೆ ಹಂಚಿಕೆಯಲ್ಲಿ ಮೋದಿ ಪಾರಮ್ಯ

ಸಚಿವರಿಗೆ ಖಾತೆ ಹಂಚಿಕೆಯಲ್ಲೂ ನರೇಂದ್ರ ಮೋದಿ ಅವರೇ ಪ್ರಾಬಲ್ಯ ಮೆರೆದಿದ್ದಾರೆ. ಕೇಂದ್ರ ಗೃಹ ಖಾತೆಯನ್ನು ಅಮಿತ್‌ ಶಾ ಅವರಿಗೆ, ಹಣಕಾಸು ಖಾತೆಯನ್ನು ನಿರ್ಮಲಾ ಸೀತಾರಾಮನ್‌, ರಕ್ಷಣಾ ಖಾತೆಯನ್ನು ರಾಜನಾಥ್‌ ಸಿಂಗ್‌ ಹಾಗೂ ರಸ್ತೆ ಸಾರಿಗೆ ಹಾಗೂ ರಾಷ್ಟ್ರೀಯ ಹೆದ್ದಾರಿಗಳ ಖಾತೆಯನ್ನು ನಿತಿನ್‌ ಗಡ್ಕರಿ ಅವರಿಗೇ ನೀಡುವ ಮೂಲಕ ನರೇಂದ್ರ ಮೋದಿ ಅವರು ಮೊದಲಿನಂತೆಯೇ ಬಿಜೆಪಿ ಬಳಿಯೇ ಉಳಿಸಿಕೊಳ್ಳುವ ಮೂಲಕ ಚಾಣಾಕ್ಷತನ ಮೆರೆದಿದ್ದಾರೆ. ಅಷ್ಟೇ ಅಲ್ಲ, ಮೈತ್ರಿ ಸರ್ಕಾರದ ಮೇಲೆಯೂ ತಮ್ಮ ಹಿಡಿತ ಇದೆ ಎಂಬುದನ್ನು ಅವರು ಸಾಬೀತುಪಡಿಸಿದ್ದಾರೆ.

ಮೈತ್ರಿ ಸರ್ಕಾರ ರಚನೆಗೂ ಮೊದಲು, ನಿತೀಶ್‌ ಕುಮಾರ್‌ ಹಾಗೂ ಟಿಡಿಪಿ ಸೇರಿ ಮೈತ್ರಿ ಪಕ್ಷಗಳಿಗೇ ಪ್ರಮುಖ ನಾಲ್ಕು ಖಾತೆಗಳಲ್ಲಿ ಒಂದಷ್ಟನ್ನು ಮೋದಿ ನೀಡಬೇಕಾಗುತ್ತದೆ. ಅದರಲ್ಲೂ ಗೃಹ ಖಾತೆ ಹಾಗೂ ಹಣಕಾಸು ಖಾತೆಗಳನ್ನು ಮಿತ್ರಪಕ್ಷಗಳಿಗೆ ಬಿಟ್ಟುಕೊಡಬೇಕಾಗುತ್ತದೆ ಎಂಬುದಾಗಿ ಹೇಳಲಾಗುತ್ತಿತ್ತು. ಆದರೆ, ಮೊದಲ ಹಾಗೂ ಎರಡನೇ ಅವಧಿಯಂತೆ, ಮೂರನೇ ಅವಧಿಯಲ್ಲೂ ನರೇಂದ್ರ ಮೋದಿ ಅವರು ಪ್ರಮುಖ ಖಾತೆಗಳನ್ನು ಬಿಜೆಪಿ ಬಳಿಯೇ ಉಳಿಸಿಕೊಳ್ಳುವ ಮೂಲಕ ತಮ್ಮ ಹಿಡಿತವನ್ನು ಸಾಬೀತುಪಡಿಸಿದ್ದಾರೆ ಎಂದೇ ವಿಶ್ಲೇಷಿಸಲಾಗುತ್ತಿದೆ.

ಇದನ್ನೂ ಓದಿ: Narendra Modi: ಮೊದಲ ಕ್ಯಾಬಿನೆಟ್‌ ಸಭೆಯಲ್ಲಿ ಪ್ರಧಾನಿ ಮೋದಿ ಸಚಿವರಿಗೆ ಹೇಳಿದ ಕಿವಿ ಮಾತು ಇದು

Continue Reading

ದೇಶ

Narendra Modi: ಮೊದಲ ಕ್ಯಾಬಿನೆಟ್‌ ಸಭೆಯಲ್ಲಿ ಪ್ರಧಾನಿ ಮೋದಿ ಸಚಿವರಿಗೆ ಹೇಳಿದ ಕಿವಿ ಮಾತು ಇದು

Narendra Modi: ಪ್ರಧಾನಿಯಾಗಿ ಅಧಿಕಾರ ಕೈಗೆತ್ತಿಕೊಂಡ ಬಳಿಕ ಸೋಮವಾರ ನರೇಂದ್ರ ಮೋದಿ ಅವರು ಮೊದಲ ಸಚಿವ ಸಂಪುಟ ಸಭೆ ನಡೆಸಿದ್ದು, ಕ್ಯಾಬಿನೆಟ್‌ನ ಭಾಗವಾಗಿ ಭಾನುವಾರ ಪ್ರಮಾಣ ವಚನ ಸ್ವೀಕರಿಸಿದ 71 ಸಚಿವರಿಗೆ ಖಾತೆಗಳನ್ನು ಹಂಚಿಕೆ ಮಾಡಲಾಯಿತು. ಈ ವೇಳೆ ಸಚಿವರನ್ನು ಉದ್ದೇಶಿಸಿ ಮಾತನಾಡಿದ ಅವರು, “ಅನಗತ್ಯ ಹೇಳಿಕೆಗಳನ್ನು ನೀಡಬೇಡಿ ಮತ್ತು ನಿಮ್ಮ ಸಚಿವಾಲಯಕ್ಕೆ ಸಂಬಂಧಿಸಿದ ವಿಷಯಗಳ ಬಗ್ಗೆ ಅಗತ್ಯವಿದ್ದಾಗ ಮಾತ್ರ ಮಾತನಾಡಿ” ಎಂದು ನಲಹೆ ನೀಡಿದರು.

VISTARANEWS.COM


on

Narendra Modi
Koo

ನವದೆಹಲಿ: ಪ್ರಧಾನಿಯಾಗಿ ಸತತ ಮೂರನೇ ಬಾರಿಗೆ ನರೇಂದ್ರ ಮೋದಿ (Narendra Modi) ಅವರು ಪ್ರಮಾಣ ವಚನ ಸ್ವೀಕರಿಸಿದ್ದಾರೆ. ಪ್ರಧಾನಿಯಾಗಿ ಅಧಿಕಾರ ಕೈಗೆತ್ತಿಕೊಂಡ ಬಳಿಕ ಅವರು ಸೋಮವಾರ (ಜೂನ್‌ 10) ಮೊದಲ ಸಚಿವ ಸಂಪುಟ ಸಭೆ ನಡೆಸಿದ್ದು, ಕ್ಯಾಬಿನೆಟ್‌ನ ಭಾಗವಾಗಿ ಭಾನುವಾರ ಪ್ರಮಾಣ ವಚನ ಸ್ವೀಕರಿಸಿದ 71 ಸಚಿವರಿಗೆ ಖಾತೆಗಳನ್ನು ಹಂಚಿಕೆ ಮಾಡಲಾಯಿತು (Cabinet 3.0). ಈ ವೇಳೆ ಸಚಿವರನ್ನು ಉದ್ದೇಶಿಸಿ ಮಾತನಾಡಿದ ಅವರು, “ಅನಗತ್ಯ ಹೇಳಿಕೆಗಳನ್ನು ನೀಡಬೇಡಿ ಮತ್ತು ನಿಮ್ಮ ಸಚಿವಾಲಯಕ್ಕೆ ಸಂಬಂಧಿಸಿದ ವಿಷಯಗಳ ಬಗ್ಗೆ ಅಗತ್ಯವಿದ್ದಾಗ ಮಾತ್ರ ಮಾತನಾಡಿ” ಎಂದು ನಲಹೆ ನೀಡಿದರು.

“ಸಮಯಕ್ಕೆ ಸರಿಯಾಗಿ ಸಚಿವಾಲಯವನ್ನು ತಲುಪಬೇಕು. ಇದು ಕಚೇರಿ ಸಿಬ್ಬಂದಿಯ ಮೇಲೆ ಸಕಾರಾತ್ಮಕ ಪರಿಣಾಮ ಬೀರುತ್ತದೆʼʼ ಎಂದು ಪ್ರಧಾನಿ ಕೇಂದ್ರ ಸಚಿವರಿಗೆ ಕಿವಿ ಮಾತು ಹೇಳಿದರು. “ಕಡತದ ಬಗ್ಗೆ ರಾಜ್ಯ ಸಚಿವರೊಂದಿಗೆ ಚರ್ಚೆ ನಡೆಸಿ. ಯಾವುದೇ ನಿರ್ಧಾರ ತೆಗೆದುಕೊಳ್ಳುವ ಮುನ್ನ ಅವರೊಂದಿಗೆ ಚರ್ಚೆ ನಡೆಸಿ. ಅವರನ್ನೂ ಸಕ್ರಿಯವಾಗಿ ತೊಡಗಿಸಿಕೊಳ್ಳಿ” ಎಂದು ಮೋದಿ ಸಚಿವರಿಗೆ ಸಲಹೆ ನೀಡಿದರು.

ದೇಶದ ನಗರ ಹಾಗೂ ಗ್ರಾಮೀಣ ಪ್ರದೇಶದಲ್ಲಿ ಬಡವರಿಗೆ 3 ಕೋಟಿ ಮನೆಗಳನ್ನು ನಿರ್ಮಿಸಿಕೊಡುವ ಮಹತ್ವದ ತೀರ್ಮಾನವನ್ನು ಮೊದಲ ಸಂಪುಟ ಸಭೆಯಲ್ಲಿ ಕೈಗೊಳ್ಳಲಾಗಿದೆ. ಪ್ರಧಾನಮಂತ್ರಿ ಆವಾಸ್‌ ಯೋಜನೆ ಅಡಿಯಲ್ಲಿ 3 ಕೋಟಿ ಮನೆಗಳ ನಿರ್ಮಾಣಕ್ಕೆ ತೀರ್ಮಾನಿಸಲಾಗಿದೆ.

ನರೇಂದ್ರ ಮೋದಿ ಅವರ ನಿವಾಸದಲ್ಲಿಯೇ ಸಂಪುಟ ಸಭೆ ನಡೆದಿದ್ದು, 30 ಸಂಪುಟ ದರ್ಜೆ ಸಚಿವರು, ಐವರು ಸ್ವತಂತ್ರ ಖಾತೆ ನಿರ್ವಹಣೆ ಹಾಗೂ 31 ರಾಜ್ಯ ಖಾತೆ ಸಚಿವರು ಪಾಲ್ಗೊಂಡಿದ್ದರು. ಮೊದಲ ಸಂಪುಟ ಸಭೆಯಲ್ಲಿಯೇ ಬಡವರಿಗೆ ಅನುಕೂಲವಾಗುವ ದಿಸೆಯಲ್ಲಿ ನಿರ್ಧಾರ ತೆಗೆದುಕೊಳ್ಳಲಾಗಿದ್ದು, ಇದಕ್ಕೆ ಎಲ್ಲ ಸಚಿವರು ಸಹಮತ ಸೂಚಿಸಿದರು. ಇನ್ನು ಆರಂಭದಲ್ಲಿ ಅವರು ‘ಪಿಎಂ ಕಿಸಾನ್ ನಿಧಿ’ ಬಿಡುಗಡೆಯ ಕಡತಕ್ಕೆ ಮೋದಿ ಸಹಿ ಹಾಕಿದ್ದರು. ಇದು ಅವರು ಮೂರನೇ ಅವಧಿಯಲ್ಲಿ ಸಹಿ ಹಾಕಿದ ಮೊದಲ ಫೈಲ್​. ಪಿಎಂ ಕಿಸಾನ್ ನಿಧಿಯ 17ನೇ ಕಂತಿನ ಬಿಡುಗಡೆಗೆ ಅಧಿಕಾರ ನೀಡುವ ಕಡತಕ್ಕೆ ಅವರು ಸಹಿ ಹಾಕಿದ್ದರು. ಈ ಯೋಜನೆ ಮೂಲಕ 9.3 ಕೋಟಿ ರೈತರಿಗೆ ಪ್ರಯೋಜನ ನೀಡುವ ಸುಮಾರು 20,000 ಕೋಟಿ ರೂ. ಬಿಡುಗಡೆಯಾಗಲಿದೆ.

ಪ್ರತಿಭಾ ಪಾಟೀಲ್‌, ಮನಮೋಹನ ಸಿಂಗ್‌, ದೇವೇಗೌಡ ಅವರ ಆಶೀರ್ವಾದ ಪಡೆದ ಮೋದಿ

ಸೋಮವಾರ ಅಧಿಕಾರ ವಹಿಸಿಕೊಂಡ ಕೂಡಲೇ ಮೋದಿ ಮಾಜಿ ರಾಷ್ಟ್ರಪತಿ ಪ್ರತಿಭಾ ಪಾಟೀಲ್‌ (Pratibha Patil) ಮತ್ತು ಮಾಜಿ ಪ್ರಧಾನ ಮಂತ್ರಿಗಳಾದ ಮನಮೋಹನ್‌ ಸಿಂಗ್‌ (Manmohan Singh) ಮತ್ತು ಎಚ್‌.ಡಿ.ದೇವೇಗೌಡ (HD Devegowda) ಅವರಿಗೆ ಕರೆ ಮಾಡಿ ಆಶೀರ್ವಾದ ಪಡೆದುಕೊಂಡರು.

ಇದನ್ನೂ ಓದಿ: Rashtrapati Bhavan: ಮೋದಿ ಪ್ರಮಾಣ ವಚನ ಸಮಾರಂಭದ ವೇಳೆ ಕಾಣಿಸಿಕೊಂಡಿದ್ದು ಚಿರತೆಯಲ್ಲ; ಪೊಲೀಸರ ಸ್ಪಷ್ಟನೆ

ಪ್ರತಿಭಾ ಪಾಟೀಲ್‌ ಮತ್ತು ಮನಮೋಹನ್‌ ಸಿಂಗ್ ಇಬ್ಬರೂ ಯುಪಿಎ ಸರ್ಕಾರದ ಅವಧಿಯಲ್ಲಿ ರಾಷ್ಟ್ರಪತಿ ಮತ್ತು ಪ್ರಧಾನಿಯಾಗಿದ್ದರು. ಕಾಂಗ್ರೆಸ್ ಬೆಂಬಲಿತ ಯುನೈಟೆಡ್ ಫ್ರಂಟ್ ಸರ್ಕಾರದ ಅವಧಿಯಲ್ಲಿ ದೇವೇಗೌಡ ಅವರು ಪ್ರಧಾನಿಯಾಗಿದ್ದರು. ದೇವೇಗೌಡ ಅವರ ಪುತ್ರ, ಮಾಜಿ ಮುಖ್ಯಮಂತ್ರಿ ಎಚ್‌.ಡಿ.ಕುಮಾರಸ್ವಾಮಿ ಅವರು ಮೋದಿ ಕ್ಯಾಬಿನೆಟ್‌ನಲ್ಲಿ ಸ್ಥಾನ ಪಡೆದುಕೊಂಡಿದ್ದಾರೆ. ಉಕ್ಕು ಮತ್ತು ಬೃಹತ್ ಕೈಗಾರಿಕೆ ಖಾತೆ (ಸಂಪುಟ ದರ್ಜೆ)ಯ ಸಚಿವರಾಗಿ ಅವರು ನಿಯುಕ್ತಿಗೊಂಡಿದ್ದಾರೆ.

Continue Reading

ದೇಶ

Supreme Court: ನೀಟ್​ ಅಕ್ರಮ ಆರೋಪ; ರಾಷ್ಟ್ರೀಯ ಪರೀಕ್ಷಾ ಸಂಸ್ಥೆಗೆ ನೋಟಿಸ್‌ ಜಾರಿ ಮಾಡಿದ ಸುಪ್ರೀಂ ಕೋರ್ಟ್‌

Supreme Court: ಪದವಿಪೂರ್ವ ವೈದ್ಯಕೀಯ ಕೋರ್ಸ್ ಪ್ರವೇಶಕ್ಕಾಗಿ ನಡೆದ ರಾಷ್ಟ್ರೀಯ ಪ್ರವೇಶ ಮತ್ತು ಅರ್ಹತಾ ಪರೀಕ್ಷೆಯಲ್ಲಿ ಅಕ್ರಮ ನಡೆದಿರುವ ಬಗ್ಗೆ ಆರೋಪ ಕೇಳಿ ಬಂದಿದ್ದು, ಹೊಸದಾಗಿ ಪರೀಕ್ಷೆ ನಡೆಸುವಂತೆ ಹಲವು ಅಭ್ಯರ್ಥಿಗಳು ಸುಪ್ರೀಂ ಕೋರ್ಟ್‌ ಮೆಟ್ಟಿಲೇರಿದ್ದಾರೆ. ಈ ಹಿನ್ನೆಲೆಯಲ್ಲಿ ಸುಪ್ರೀಂ ಕೋರ್ಟ್‌ ಮಂಗಳವಾರ, ರಾಷ್ಟ್ರೀಯ ಪರೀಕ್ಷಾ ಸಂಸ್ಥೆಗೆ ನೋಟಿಸ್‌ ಜಾರಿ ಮಾಡಿ ಪ್ರಶ್ನೆ ಪತ್ರಿಕೆ ಸೋರಿಕೆ ಹಾಗೂ ನ್ಯೂನತೆಗಳ ಬಗ್ಗೆ ಪ್ರತಿಕ್ರಿಯೆ ನೀಡುವಂತೆ ಸೂಚಿಸಿದೆ.

VISTARANEWS.COM


on

Supreme Court
Koo

ನವದೆಹಲಿ: ಪದವಿಪೂರ್ವ ವೈದ್ಯಕೀಯ ಕೋರ್ಸ್ ಪ್ರವೇಶಕ್ಕಾಗಿ ನಡೆದ ರಾಷ್ಟ್ರೀಯ ಪ್ರವೇಶ ಮತ್ತು ಅರ್ಹತಾ ಪರೀಕ್ಷೆ (NEET UG)ಯಲ್ಲಿ ಅಕ್ರಮ ನಡೆದಿರುವ ಬಗ್ಗೆ ಆರೋಪ ಕೇಳಿ ಬಂದಿದ್ದು, ಹೊಸದಾಗಿ ಪರೀಕ್ಷೆ ನಡೆಸುವಂತೆ ಹಲವು ಅಭ್ಯರ್ಥಿಗಳು ಸುಪ್ರೀಂ ಕೋರ್ಟ್‌ (Supreme Court) ಕದ ತಟ್ಟಿದ್ದಾರೆ. ಈ ಹಿನ್ನೆಲೆಯಲ್ಲಿ ಸುಪ್ರೀಂ ಕೋರ್ಟ್‌ ಮಂಗಳವಾರ, ರಾಷ್ಟ್ರೀಯ ಪರೀಕ್ಷಾ ಸಂಸ್ಥೆ (NTA)ಗೆ ನೋಟಿಸ್‌ ಜಾರಿ ಮಾಡಿದೆ. ಇದೇ ವೇಳೆ ಪರೀಕ್ಷೆಯಲ್ಲಿ ತೇರ್ಗಡೆಯಾಗಿರುವ ವಿದ್ಯಾರ್ಥಿಗಳ ಕೌನ್ಸೆಲಿಂಗ್​ ತಡೆಯಲು ನಿರಾಕರಿಸಿದೆ.

ಪ್ರಶ್ನೆ ಪತ್ರಿಕೆ ಸೋರಿಕೆ ಹಾಗೂ ನ್ಯೂನತೆಗಳ ಬಗ್ಗೆ ಪ್ರತಿಕ್ರಿಯೆ ನೀಡುವಂತೆ ಎನ್‌ಟಿಎಗೆ ಸೂಚಿಸಿದೆ. ಅಲ್ಲದೆ ಈ ಪ್ರಕರಣ ಪರೀಕ್ಷೆಯ ಪಾವಿತ್ರ್ಯತೆಯ ಬಗ್ಗೆಯೂ ಅನುಮಾನ ಮೂಡಿಸಿದೆ ಎಂದು ನ್ಯಾಯಾಲಯ ಅಭಿಪ್ರಾಯಪಟ್ಟಿದೆ. ರಾಷ್ಟ್ರೀಯ ಪರೀಕ್ಷಾ ಸಂಸ್ಥೆ ನಡೆಸುವ ನೀಟ್‌ ಪರೀಕ್ಷೆಗೆ ಈ ವರ್ಷ ದೇಶಾದ್ಯಂತ 24 ಲಕ್ಷಕ್ಕೂ ಹೆಚ್ಚು ಅಭ್ಯರ್ಥಿಗಳು ಹೆಸರು ನೋಂದಾಯಿಸಿದ್ದರು. ಅದರಲ್ಲಿ 23,33,297 ಪರೀಕ್ಷೆ ಹಾಜರಾಗಿದ್ದು, 72,782 ಮಂದಿ ಗೈರಾಗಿದ್ದರು. ಇನ್ನು 10,29,154 ಬಾಲಕರು 13,76,831 ಬಾಲಕಿಯರು ಹಾಗೂ 18 ಮಂದಿ ತೃತೀಯ ಲಿಂಗಿಗಳು ಪರೀಕ್ಷೆ ಬರೆದಿದ್ದರು.

ದೇಶಾದ್ಯಂತ 571 ನಗರ ಮತ್ತು ದೇಶದ ಹೊರಗಿನ 14 ನಗರಗಳು ಸೇರಿದಂತೆ 4,750 ವಿವಿಧ ಕೇಂದ್ರಗಳಲ್ಲಿ ಮೇ 5ರ ಮಧ್ಯಾಹ್ನ 2ರಿಂದ 5:20ರ ವರೆಗೆ ಪರೀಕ್ಷೆ ನಡೆದಿತ್ತು. ಪರೀಕ್ಷೆಯನ್ನು 13 ಭಾಷೆಗಳಲ್ಲಿ (ಅಸ್ಸಾಮಿ, ಬಂಗಾಳಿ, ಇಂಗ್ಲಿಷ್, ಗುಜರಾತಿ, ಹಿಂದಿ, ಕನ್ನಡ, ಮಲಯಾಳಂ, ಮರಾಠಿ, ಒಡಿಯಾ, ಪಂಜಾಬಿ, ತಮಿಳು, ತೆಲುಗು, ಮತ್ತು ಉರ್ದು) ನಡೆಸಲಾಗಿತ್ತು. ಜೂನ್​ 4ರಂದು ನೀಟ್​ ಫಲಿತಾಂಶ ಪ್ರಕಟವಾಗಿತ್ತು.

ಆರೋಪ ಏನು?

ನೀಟ್‌ ಪರೀಕ್ಷೆಯಲ್ಲಿ ರ‍್ಯಾಂಕ್‌ ಪಡೆದ 67 ವಿದ್ಯಾರ್ಥಿಗಳಲ್ಲಿ 44 ವಿದ್ಯಾರ್ಥಿಗಳು ಗ್ರೇಸ್‌ ಮಾರ್ಕ್ಸ್‌ ಆಧಾರದ ಮೇಲೆ ಟಾಪರ್‌ಗಳಾಗಿದ್ದಾರೆ. ಇನ್ನು ಹರಿಯಾಣದಲ್ಲಿ ಒಂದೇ ಕೇಂದ್ರದಲ್ಲಿ ಪರೀಕ್ಷೆ ಬರೆದ ಆರು ವಿದ್ಯಾರ್ಥಿಗಳು ಜಂಟಿಯಾಗಿ ಟಾಪ್‌ ಸ್ಥಾನ ಪಡೆದಿದ್ದಾರೆ. ಇದರಿಂದಾಗಿ ಪರೀಕ್ಷೆಯಲ್ಲಿ ಅಕ್ರಮ ನಡೆದಿದೆ, ಪ್ರಶ್ನೆಪತ್ರಿಕೆ ಸೋರಿಕೆ ಮಾಡಲಾಗಿದೆ ಎಂದು ಕೆಲವು ಪೋಷಕರು ಆರೋಪಿಸಿದ್ದಾರೆ. ಹೀಗಾಗಿ ಮರು ಪರೀಕ್ಷೆ ನಡೆಸಬೇಕು ಎಂದು ಸುಪ್ರೀಂ ಕೋರ್ಟ್‌ ಮೆಟ್ಟಿಲೇರಿದ್ದಾರೆ.

ಇದನ್ನೂ ಓದಿ: NEET UG 2024: ನೀಟ್‌ನಲ್ಲಿ ಹೆಚ್ಚು ಅಂಕ ಗಳಿಸಲು ಏನು ಮಾಡಬೇಕು? ಈ ಟಾಪರ್‌ ಹೇಳೋದು ಕೇಳಿ

1,500 ವಿದ್ಯಾರ್ಥಿಗಳ ಪತ್ರಿಕೆ ಮರು ಮೌಲ್ಯಮಾಪನಕ್ಕೆ ಸಮಿತಿ ರಚನೆ

ವೈದ್ಯಕೀಯ ಕೋರ್ಸ್‌ಗಳ ಪ್ರವೇಶಾತಿಗಾಗಿ ನಡೆದ ರಾಷ್ಟ್ರೀಯ ಅರ್ಹತಾ ಮತ್ತು ಪ್ರವೇಶ ಪರೀಕ್ಷೆಯಲ್ಲಿ ಅಕ್ರಮ ನಡೆದಿದೆ ಎಂಬ ಆರೋಪಗಳು ಕೇಳಿಬಂದ ಹಿನ್ನೆಲೆಯಲ್ಲಿ ಕೇಂದ್ರ ಸರ್ಕಾರವು ಗ್ರೇಸ್‌ ಮಾರ್ಕ್ಸ್‌ ಪಡೆದ 1,500 ವಿದ್ಯಾರ್ಥಿಗಳ ಫಲಿತಾಂಶವನ್ನು ಮರು ಮೌಲ್ಯಮಾಪನ ಮಾಡಲು ಸಮಿತಿಯೊಂದನ್ನು ರಚಿಸಿದೆ ಎಂದು ಎನ್‌ಟಿಎ ಜೂನ್‌ 8ರಂದು ಮಾಹಿತಿ ನೀಡಿತ್ತು.

“ನೀಟ್‌ ಬರೆದ ಅಭ್ಯರ್ಥಿಗಳಿಗೆ ರ‍್ಯಾಂಕ್‌ ನೀಡುವ ಮಾನದಂಡಕ್ಕೆ ಗ್ರೇಸ್‌ ಮಾರ್ಕ್ಸ್‌ ನೀಡಿರುವುದರಿಂದ ಯಾವುದೇ ಪರಿಣಾಮ ಉಂಟಾಗಿಲ್ಲ. ಆದರೂ ಗ್ರೇಸ್‌ ಮಾರ್ಕ್ಸ್‌ ಪಡೆದವರ ಉತ್ತರ ಪತ್ರಿಕೆಗಳನ್ನು ಮತ್ತೆ ಮೌಲ್ಯಮಾಪನ ಮಾಡಲಾಗುತ್ತದೆ. ಕೇಂದ್ರ ಶಿಕ್ಷಣ ಸಚಿವಾಲಯವು ಈ ಕುರಿತು ಸಮಿತಿಯೊಂದನ್ನು ರಚಿಸಿದೆ. ಮರು ಮೌಲ್ಯಮಾಪನದಿಂದ ವಿದ್ಯಾರ್ಥಿಗಳು ಕೋರ್ಸ್‌ಗಳಿಗೆ ಪ್ರವೇಶಾತಿ ಪಡೆಯಲು ಯಾವುದೇ ಪರಿಣಾಮ ಉಂಟಾಗುವುದಿಲ್ಲ” ಎಂಬುದಾಗಿ ಎನ್‌ಟಿಎ ಮಹಾ ನಿರ್ದೇಶಕ ಸುಬೋಧ್‌ ಸಿಂಗ್‌ ಮಾಹಿತಿ ನೀಡಿದ್ದರು. ಹಾಗೆಯೇ ಪರೀಕ್ಷೆಯಲ್ಲಿ ಅಕ್ರಮ ನಡೆದಿಲ್ಲ, ಪ್ರಶ್ನೆಪತ್ರಿಕೆಗಳ ಸೋರಿಕೆಯಾಗಿಲ್ಲ ಎಂದು ಸ್ಪಷ್ಟಪಡಿಸಿದ್ದರು.

Continue Reading

ದೇಶ

All Eyes on Raesi: ಹಿಂದೂ ಯಾತ್ರಿಕರ ಹತ್ಯೆ: ಆಲ್ ಐಸ್ ಆನ್ ರಿಯಾಸಿ; ರಫಾ ರಫಾ ಅನ್ನುತ್ತಿದ್ದ ಸೆಲೆಬ್ರಿಟಿಗಳು ಈಗೆಲ್ಲಿ?

All Eyes on Raesi: ಜಮ್ಮು ಮತ್ತು ಕಾಶ್ಮೀರದ ರಿಯಾಸಿ ಜಿಲ್ಲೆಯಲ್ಲಿ ಭಾನುವಾರ (ಜೂನ್ 9) ನಡೆದ ಭಯೋತ್ಪಾದಕರ ಗುಂಡಿನ ದಾಳಿಯ ಸಂದರ್ಭದಲ್ಲಿ, ಪುಟ್ಟ ಕಂದಮ್ಮನೂ ಸೇರಿ 10 ಮಂದಿ ಮೃತಪಟ್ಟಿದ್ದಾರೆ. ಸದ್ಯ ಸೋಷಿಯಲ್‌ ಮೀಡಿಯಾದಲ್ಲಿ ʼಆಲ್ ಐಸ್ ಆನ್ ರಿಯಾಸಿʼ (All Eyes on Raesi) ಎನ್ನುವ ಪೋಸ್ಟ್‌ ವೈರಲ್‌ ಆಗಿದೆ. ಮಾತ್ರವಲ್ಲ ಈ ಹಿಂದೆ ʼಆಲ್ ಐಸ್ ಆನ್ ರಫಾʼ ಎನ್ನುವ ಪೋಸ್ಟ್‌ ಹಂಚಿಕೊಂಡು ರಫಾ (ಪ್ಯಾಲೆಸ್ತೀನ್‌) ಜನರಿಗಾಗಿ ಕಂಬನಿ ಸುರಿಸಿದ್ದ ಸೆಲೆಬ್ರಿಟಿಗಳು ಈಗ ಮೌನವಾಗಿರುವುದಕ್ಕೆ ಆಕ್ರೋಶ ವ್ಯಕ್ತವಾಗುತ್ತಿದೆ. ಸೆಲೆಬ್ರಿಟಿಗಳ ಇಬ್ಬಗೆಯ ನೀತಿಯನ್ನು ಹಲವರು ಪ್ರಶ್ನಿಸಿದ್ದಾರೆ.

VISTARANEWS.COM


on

All Eyes on Raesi
Koo

ಶ್ರೀನಗರ: ಜಮ್ಮು ಮತ್ತು ಕಾಶ್ಮೀರದ (Jammu & Kashmir) ರಿಯಾಸಿ ಜಿಲ್ಲೆಯಲ್ಲಿ ಭಾನುವಾರ (ಜೂನ್ 9) ನಡೆದ ಭಯೋತ್ಪಾದಕರ ಗುಂಡಿನ ದಾಳಿಯ (Reasi terror attack) ಸಂದರ್ಭದಲ್ಲಿ, ಪುಟ್ಟ ಕಂದಮ್ಮನೂ ಸೇರಿ 10 ಮಂದಿ ಮೃತಪಟ್ಟಿದ್ದಾರೆ. ಜಮ್ಮು ಮತ್ತು ಕಾಶ್ಮೀರದ ಶಿವ ಖೋರಿ ದೇವಸ್ಥಾನಕ್ಕೆ ಯಾತ್ರಾರ್ಥಿಗಳನ್ನು ಕರೆದೊಯ್ಯುತ್ತಿದ್ದ ಬಸ್ ಮೇಲೆ ಭಯೋತ್ಪಾದಕರು ದಾಳಿ ನಡೆಸಿದ್ದರು. ಈ ವೇಳೆ ಬಸ್‌ ಆಳವಾದ ಕಮರಿಗೆ ಬಿದ್ದು, ದುರಂತ ಸಂಭವಿಸಿದೆ. ಸದ್ಯ ಸೋಷಿಯಲ್‌ ಮೀಡಿಯಾದಲ್ಲಿ ʼಆಲ್ ಐಸ್ ಆನ್ ರಿಯಾಸಿʼ (All Eyes on Raesi) ಎನ್ನುವ ಪೋಸ್ಟ್‌ ವೈರಲ್‌ ಆಗಿದೆ. ಜತೆಗೆ ಈ ಹಿಂದೆ ʼಆಲ್ ಐಸ್ ಆನ್ ರಫಾʼ ಎನ್ನುವ ಪೋಸ್ಟ್‌ ಹಂಚಿಕೊಂಡು ರಫಾ (ಪ್ಯಾಲೆಸ್ತೀನ್‌) ಜನರಿಗಾಗಿ ಕಂಬನಿ ಸುರಿಸಿದ್ದ ಸೆಲೆಬ್ರಿಟಿಗಳು ಈಗ ಮೌನವಾಗಿರುವುದಕ್ಕೆ ಆಕ್ರೋಶ ವ್ಯಕ್ತವಾಗುತ್ತಿದೆ.

ಇತ್ತೀಚೆಗೆ ಇಸ್ರೇಲ್‌ನ ವೈಮಾನಿಕ ದಾಳಿಯ ನಂತರ ದಕ್ಷಿಣ ಗಾಜಾದಲ್ಲಿ 45 ಮಂದಿ ಸಾವನ್ನಪ್ಪಿ, 200ಕ್ಕೂ ಹೆಚ್ಚು ಜನರು ಗಾಯಗೊಂಡಿದ್ದರು. ಬಳಿಕ ದಕ್ಷಿಣ ಗಾಜಾದ ರಫಾ ನಗರದಲ್ಲಿನ ನಿರಾಶ್ರಿತರ ಶಿಬಿರದಲ್ಲಿ ಡೇರೆಗಳ ಚಿತ್ರ ಸೋಷಿಯಲ್‌ ಮೀಡಿಯಾದಲ್ಲಿ ವೈರಲ್‌ ಆಗಿತ್ತು. ಇದರಲ್ಲಿ ʼಆಲ್ ಐಸ್ ಆನ್ ರಫಾʼ ಎಂದು ಬರೆದು, ರಫಾ ನಿರಾಶ್ರಿತರಿಗೆ ಬೆಂಬಲ ವ್ಯಕ್ತಪಡಿಸಲಾಗಿತ್ತು. ಈ ಪೋಸ್ಟ್‌ ಅನ್ನು ಭಾರತದ ಸೆಲೆಬ್ರಿಟಿಗಳೂ ಹಂಚಿಕೊಂಡಿದ್ದರು. ಪ್ರಿಯಾಂಕಾ ಚೋಪ್ರಾ, ವರುಣ್ ಧವನ್, ಆಲಿಯಾ ಭಟ್, ಸಮಂತಾ ರುತ್ ಪ್ರಭು, ತ್ರಿಪ್ತಿ ಡಿಮ್ರಿ, ರಿಚಾ ಚಡ್ಡಾ, ರೋಹಿತ್ ಶರ್ಮಾ ಅವರ ಪತ್ನಿ ರಿತಿಕಾ ಸಜ್ದೇಹ್ ಮುಂತಾದ ಸೆಲೆಬ್ರಿಟಿಗಳು ʼಆಲ್ ಐಸ್ ಆನ್ ರಫಾʼ ಪೋಸ್ಟ್‌ ಹಂಚಿಕೊಂಡು ಕಂಬನಿ ಮಿಡಿದಿದ್ದರು. ಸದ್ಯ ಇವರೆಲ್ಲ ಭಾರತದಲ್ಲೇ ನಡೆದ ದುರಂತದ ಬಗ್ಗೆ ಮೌನ ವಹಿಸಿದ್ದು ನೆಟ್ಟಿಗರನ್ನು ಕೆರಳಿಸಿದೆ. ʼಆಲ್ ಐಸ್ ಆನ್ ರಿಯಾಸಿʼ ಎನ್ನುವ ಪೋಸ್ಟ್‌ ಈ ಸೆಲೆಬ್ರಿಟಿಗಳ ಸೋಷಿಯಲ್‌ ಮೀಡಿಯಾದಲ್ಲಿ ಯಾಕೆ ಕಾಣಿಸಿಕೊಂಡಿಲ್ಲ ಎಂದು ಹಲವರು ಪ್ರಶ್ನಿಸುತ್ತಿದ್ದಾರೆ.

ಹಿಂದೂಗಳಿಗೆ ಯಾಕೆ ಮನಸ್ಸು ಮಿಡಿಯುತ್ತಿಲ್ಲ?

ʼʼದೂರದ ಪ್ಯಾಲೆಸ್ತೀನಿಯರಿಗಾಗಿ ಮಿಡಿದ ಸೆಲೆಬ್ರಿಟಿಗಳ ಮನಸ್ಸು ನಮ್ಮದೇ ದೇಶದ ಮುಗ್ಧರಿಗಾಗಿ ಯಾಕೆ ಮಿಡಿಯುತ್ತಿಲ್ಲ? ಭಯೋತ್ಪಾದನೆಗಾಗಿ ಬಲಿಯಾದ ಹಿಂದೂಗಳ ಬೆಂಬಲಕ್ಕೆ ಧಾವಿಸಲು ಸೆಲೆಬ್ರಿಟಿಗಳು ಮುಂದಾಗದಿರುವುದು ದುರಂತʼʼ ಎಂದು ಹಲವರು ಆಕ್ರೋಶ ವ್ಯಕ್ತಪಡಿಸಿದ್ದಾರೆ. ಹಲವರು ಸೋಷಿಯಲ್‌ ಮೀಡಿಯಾದ ಮೂಲಕ ಈ ಬಗ್ಗೆ ಧ್ವನಿ ಎತ್ತಿದ್ದಾರೆ. ʼʼಎಲ್ಲರ ಕಣ್ಣು ರಫಾ ಮೇಲೆ ಎನ್ನುತ್ತಿದ್ದವರೆಲ್ಲ ಈಗ ಮೌನಕ್ಕೆ ಶರಣಾಗಿದ್ದಾರೆʼʼ ಎಂದು ಒಬ್ಬರು ರಿಯಾಸಿ ದುರಂತದ ಫೋಟೊವನ್ನು ಪೋಸ್ಟ್‌ ಮಾಡಿ ಸಿನಿಮಾ ನಟ-ನಟಿಯರಿಗೆ ಝಾಡಿಸಿದ್ದಾರೆ.

ʼʼಕೆಲವು ದಿನಗಳ ಹಿಂದೆ ಬಾಲಿವುಡ್‌ ನಟಿ ಪ್ರಿಯಾಂಕಾ ಚೋಪ್ರಾ ಅವರ ಕಣ್ಣು ರಫಾದತ್ತ ನೆಟ್ಟಿತ್ತು. ಈಗ ಅವರ ಕಣ್ಣು ಮುಚ್ಚಿದೆ. ಅವರಿಗೆ ಮುಸ್ಲಿಂ ಭಯೋತ್ಪಾದಕರು ಹಿಂದೂ ಯಾತ್ರಾರ್ಥಿಗಳನ್ನು ಹತ್ಯೆ ಮಾಡಿರುವುದು ಕಾಣಿಸುತ್ತಿಲ್ಲʼʼ ಎಂದು ಇನ್ನೊಬ್ಬರು ಖಾರವಾಗಿ ಪ್ರತಿಕ್ರಿಯಿಸಿದ್ದಾರೆ. ಜತೆಗೆ ರೋಹಿತ್‌ ಶರ್ಮಾ ಅವರ ಪತ್ನಿ ರಿತಿಕಾ ಸಜ್ದೇಹ್, ಮಾಧುರಿ ದೀಕ್ಷಿತ್‌ ಮುಂತಾದವರ ಮೌನವನ್ನೂ ಟೀಕಿಸಿದ್ದಾರೆ. ಒಟ್ಟಿನಲ್ಲಿ ಸೆಲೆಬ್ರಿಟಿಗಳ ಇಬ್ಬಗೆಯ ನೀತಿ ಮತ್ತೊಮ್ಮೆ ಬಟಾ ಬಯಲಾಗಿದೆ.

ಇದನ್ನೂ ಓದಿ: Terror Attack: ಕಂದಮ್ಮನನ್ನೂ ಕೊಂದ ಉಗ್ರರು; ಎದೆಗೆ ಗುಂಡು ಬಿದ್ದರೂ ಪ್ರಯಾಣಿಕರನ್ನು ಉಳಿಸಲು ಯತ್ನಿಸಿದ್ದ ಚಾಲಕ

Continue Reading
Advertisement
Paris Olympics 2024
ಕ್ರೀಡೆ9 mins ago

Paris Olympics 2024: ಪ್ಯಾರಿಸ್​ ಒಲಿಂಪಿಕ್ಸ್​ಗೆ ಅರ್ಹತೆ ಪಡೆದ ಕನ್ನಡಿಗ ಬೋಪಣ್ಣ, ಸುಮಿತ್‌ ನಾಗಲ್‌

Parliament Session 2024
ದೇಶ39 mins ago

Parliament Session 2024: ಜೂನ್‌ 24ರಿಂದ ಸಂಸತ್‌ ವಿಶೇಷ ಅಧಿವೇಶನ; ಸ್ಪೀಕರ್‌ ಆಯ್ಕೆ ಸೇರಿ ಏನೆಲ್ಲ ತೀರ್ಮಾನ?

HD Kumaraswamy
ಕರ್ನಾಟಕ44 mins ago

HD Kumaraswamy: ಎಚ್‌ಡಿಕೆ ಭೇಟಿಯಾದ ಉಕ್ಕು ಪ್ರಾಧಿಕಾರದ ಅಧ್ಯಕ್ಷ; ವಿಐಎಸ್‌ಎಲ್ ಪುನಶ್ಚೇತನದ ಬಗ್ಗೆ ಚರ್ಚೆ

Narendra Modi
ದೇಶ54 mins ago

Narendra Modi: ಮೊದಲ ಕ್ಯಾಬಿನೆಟ್‌ ಸಭೆಯಲ್ಲಿ ಪ್ರಧಾನಿ ಮೋದಿ ಸಚಿವರಿಗೆ ಹೇಳಿದ ಕಿವಿ ಮಾತು ಇದು

Actor Darshan
ಸಿನಿಮಾ1 hour ago

Actor Darshan : ದರ್ಶನ್‌ ಜೈಲಿಗೆ ಹೋಗುತ್ತಿರುವುದು ಇದೇ ಮೊದಲಲ್ಲ; ನಟನ ಮೇಲಿವೆ ಹತ್ತಾರು ಕೇಸ್‌ಗಳು!

Danielle Wyatt Marriage
ಕ್ರೀಡೆ1 hour ago

Danielle Wyatt Marriage: ಸಲಿಂಗ ಸಂಗಾತಿಯೊಂದಿಗೆ ದಾಂಪತ್ಯ ಜೀವನಕ್ಕೆ ಕಾಲಿಟ್ಟ ಇಂಗ್ಲೆಂಡ್ ಮಹಿಳಾ ಕ್ರಿಕೆಟ್​ ತಂಡದ ಆಟಗಾರ್ತಿ

Actor Darshan
ಕರ್ನಾಟಕ1 hour ago

Actor Darshan: ಒಂದಲ್ಲ, ಎರಡಲ್ಲ, 3 ಕೇಸ್‌ಗಳಲ್ಲಿ ದರ್ಶನ್‌ಗೆ ಸಂಕಷ್ಟ; ಆರೋಪ ಸಾಬೀತಾದರೆ ಯಾವ ಶಿಕ್ಷೆ?

Supreme Court
ದೇಶ1 hour ago

Supreme Court: ನೀಟ್​ ಅಕ್ರಮ ಆರೋಪ; ರಾಷ್ಟ್ರೀಯ ಪರೀಕ್ಷಾ ಸಂಸ್ಥೆಗೆ ನೋಟಿಸ್‌ ಜಾರಿ ಮಾಡಿದ ಸುಪ್ರೀಂ ಕೋರ್ಟ್‌

Actor Darshan
ಸಿನಿಮಾ2 hours ago

Actor Darshan: ರೇಣುಕಾಸ್ವಾಮಿ ಕೊಲೆ ಕೇಸ್; ತನಿಖೆ ಬಳಿಕವೇ ದರ್ಶನ್ ಪಾತ್ರ ಗೊತ್ತಾಗಲಿದೆ ಎಂದ ಸಚಿವ ಪರಮೇಶ್ವರ್‌

Actor Darshan
ಕರ್ನಾಟಕ2 hours ago

Actor Darshan: ಕೊಲೆ ಕೇಸ್‌ಗೆ ಕ್ಷಣಕ್ಕೊಂದು ಟ್ವಿಸ್ಟ್;‌ ದರ್ಶನ್‌ ಅಭಿಮಾನಿಗಳ ಸಂಘದ ಜಿಲ್ಲಾಧ್ಯಕ್ಷನೂ ಅರೆಸ್ಟ್!

Sharmitha Gowda in bikini
ಕಿರುತೆರೆ8 months ago

Geetha Serial Kannada: ನಿದ್ದೆ ಕದ್ದ ಚೋರಿ! ನಟಿ `ಭಾನುಮತಿ’ ಹಾಟ್‌ ಪೋಟೊಗಳಿಗೆ ಫ್ಯಾನ್ಸ್ ಫುಲ್ ಫಿದಾ

Kannada Serials
ಕಿರುತೆರೆ8 months ago

Kannada Serials TRP: 2ನೇ ಸ್ಥಾನದಲ್ಲಿ 2 ಧಾರಾವಾಹಿಗಳು; ಟಿಆರ್‌ಪಿ ರೇಸ್‌ನಲ್ಲಿಲ್ಲ ಭಾಗ್ಯಲಕ್ಷ್ಮೀ!

Bigg Boss- Saregamapa 20 average TRP
ಕಿರುತೆರೆ8 months ago

Kannada Serials TRP: ಏಳನೇ ಸ್ಥಾನಕ್ಕೆ ʻಅಮೃತಧಾರೆʼ ಕುಸಿತ; ಬಿಗ್‌ ಬಾಸ್‌-ಸರಿಗಮಪ ಟಿಆರ್‌ಪಿ ಎಷ್ಟು?

galipata neetu
ಕಿರುತೆರೆ6 months ago

Kanyadana Serial: ಕಿರುತೆರೆಗೆ ಮತ್ತೆ ಎಂಟ್ರಿ ಕೊಟ್ಟ ʻಗಾಳಿಪಟʼ ಖ್ಯಾತಿಯ ʻನೀತುʼ!

Kannada Serials
ಕಿರುತೆರೆ9 months ago

Kannada Serials TRP: ನಾಲ್ಕನೇ ಸ್ಥಾನಕ್ಕೆ ಕುಸಿತ ಕಂಡ ʻಸೀತಾ ರಾಮʼ; ಟಿಆರ್‌ಪಿ ರೇಸ್‌ಗೆ ʻಭಾಗ್ಯಲಕ್ಷ್ಮಿʼ ಬ್ಯಾಕ್‌!

Kannada Serials
ಕಿರುತೆರೆ8 months ago

Kannada Serials TRP: ಟಿಆರ್‌ಪಿಯಲ್ಲಿ ʻಭಾಗ್ಯಲಕ್ಷ್ಮೀʼ ಹವಾ; ʻಪುಟ್ಟಕ್ಕನ ಮಕ್ಕಳುʼ ಧಾರಾವಾಹಿಗೆ ಸಂಕಷ್ಟ!

Bigg Boss' dominates TRP; Sita Rama fell to the sixth position
ಕಿರುತೆರೆ8 months ago

Kannada Serials TRP: ಟಿಆರ್‌ಪಿಯಲ್ಲಿ ʻಬಿಗ್ ಬಾಸ್ʼದೇ ಮೇಲುಗೈ; 6ನೇ ಸ್ಥಾನಕ್ಕೆ ಕುಸಿದ ʻಸೀತಾ ರಾಮʼ

geetha serial Dhanush gowda engagement
ಕಿರುತೆರೆ6 months ago

Dhanush Gowda: ಗೀತಾ ಧಾರಾವಾಹಿ ನಟನ ನಿಶ್ಚಿತಾರ್ಥ; ಭವ್ಯಾಳ ಕಮೆಂಟ್‌ ಬಾಕ್ಸ್‌ ಆಫ್‌!

varun
ಕಿರುತೆರೆ7 months ago

Brindavana Serial: ʼಬೃಂದಾವನʼ ಧಾರಾವಾಹಿಯಲ್ಲಿ ದೊಡ್ಡ ಟ್ವಿಸ್ಟ್‌; ಪ್ರಮುಖ ಪಾತ್ರಧಾರಿಯೇ ಬದಲು

Kannada Serials
ಕಿರುತೆರೆ9 months ago

Kannada Serials TRP: ಟಿಆರ್‌ಪಿಯಲ್ಲಿ ಏರಿಕೆ ಕಂಡ ʻಅಮೃತಧಾರೆʼ; ʻಗಟ್ಟಿಮೇಳʼಕ್ಕೆ ನಾಲ್ಕನೇ ಸ್ಥಾನ!

Actor Darshan
ಸಿನಿಮಾ1 hour ago

Actor Darshan : ದರ್ಶನ್‌ ಜೈಲಿಗೆ ಹೋಗುತ್ತಿರುವುದು ಇದೇ ಮೊದಲಲ್ಲ; ನಟನ ಮೇಲಿವೆ ಹತ್ತಾರು ಕೇಸ್‌ಗಳು!

Saptami Gowda
ಸಿನಿಮಾ3 hours ago

Saptami Gowda : ಯುವ ಪತ್ನಿ ಶ್ರೀದೇವಿ ವಿರುದ್ಧ ಮಾನಹಾನಿ ಕೇಸ್; ಕಾನೂನು ಹೋರಾಟಕ್ಕೆ ಮುಂದಾದ ನಟಿ ಸಪ್ತಮಿ ಗೌಡ!

Karnataka weather Forecast
ಮಳೆ22 hours ago

Karnataka Weather : ಭಾರಿ ಮಳೆಗೆ ಮನೆ ಗೋಡೆ ಕುಸಿದು ಎಮ್ಮೆಗಳು ಸಾವು; ಆಕಳಿನ ಜೀವ ತೆಗೆದ ವಿದ್ಯುತ್‌ ತಂತಿ

Karnataka weather Forecast
ಮಳೆ4 days ago

Karnataka weather : ಮಳೆಯಲ್ಲೆ ತಪಸ್ಸಿಗೆ ಕುಳಿತ ವೃದ್ಧ; ಇನ್ನೊಂದು ವಾರ ನಾನ್‌ ಸ್ಟಾಪ್‌ ವರುಣನ ಅಬ್ಬರ

Sigandur launch
ಶಿವಮೊಗ್ಗ4 days ago

Sigandur launch: ಸಿಗಂದೂರು ಲಾಂಚ್‌ನಲ್ಲಿ ಭಾರಿ ವಾಹನಗಳಿಗೆ ನಿರ್ಬಂಧ

Karnataka Rain
ಮಳೆ5 days ago

Karnataka Rain : ಭಾರಿ ಮಳೆಗೆ ಮರ ಬಿದ್ದು ಮೇಕೆಗಳು ಸಾವು; ಸಿಡಿಲಿಗೆ ಎಲೆಕ್ಟ್ರಿಕ್‌ ಅಂಗಡಿ ಸುಟ್ಟು ಭಸ್ಮ

Lok Sabha Election Result 2024 Live
ದೇಶ1 week ago

Lok Sabha Election Result 2024 Live: ಲೋಕಸಭೆ ಚುನಾವಣೆ ಫಲಿತಾಂಶದ ಲೈವ್‌ ಇಲ್ಲಿ ವೀಕ್ಷಿಸಿ

Karnataka Rain
ಮಳೆ1 week ago

Karnataka Rain : 133 ವರ್ಷದ ರೆಕಾರ್ಡ್ ಬ್ರೇಕ್ ಮಾಡಿದ ʻಬೆಂಗಳೂರು ಮಳೆʼ

Snake Rescue Snakes spotted in heavy rain
ಮಳೆ1 week ago

Snake Rescue: ಮಳೆ ನೀರಿನಲ್ಲಿ ಹರಿದು ಬಂದು ಬೈಕ್‌ನಲ್ಲಿ ಸೇರಿಕೊಂಡ ಹಾವು; ಮನೆಗಳಲ್ಲೂ ಪ್ರತ್ಯಕ್ಷ

Karnataka Rain
ಮಳೆ1 week ago

Karnataka Rain : ವೀಕೆಂಡ್‌ ಮೋಜಿಗೆ ವರುಣ ಅಡ್ಡಿ; ಭಾನುವಾರ ಸಂಜೆಗೆ ಮಳೆ ಕಾಟ

ಟ್ರೆಂಡಿಂಗ್‌