The state government has issued an order amending the textbook Which lessons are omittedTextbook Revision: ಪಠ್ಯ ಪುಸ್ತಕ ಪರಿಷ್ಕರಿಸಿ ರಾಜ್ಯ ಸರ್ಕಾರ ಆದೇಶ; ಯಾವ ಪಾಠಗಳಿಗೆ ಕೊಕ್‌? - Vistara News

ಕರ್ನಾಟಕ

Textbook Revision: ಪಠ್ಯ ಪುಸ್ತಕ ಪರಿಷ್ಕರಿಸಿ ರಾಜ್ಯ ಸರ್ಕಾರ ಆದೇಶ; ಯಾವ ಪಾಠಗಳಿಗೆ ಕೊಕ್‌?

Textbook Revision: 6 ರಿಂದ 10ನೇ ತರಗತಿಯ ಕನ್ನಡ ಭಾಷೆ ಹಾಗೂ ಸಮಾಜ ವಿಜ್ಞಾನ ಪುಸ್ತಕದ ಪಾಠಗಳಲ್ಲಿ ಪರಿಷ್ಕರಣೆ ಮಾಡಲಾಗಿದೆ.

VISTARANEWS.COM


on

amending the textbook
ಮಹತ್ವದ, ಕುತೂಹಲಕರ ಸುದ್ದಿಗಾಗಿ ಫಾಲೊ ಮಾಡಿ
Koo

ಬೆಂಗಳೂರು: ಬಿಜೆಪಿ ನಾಯಕರ ವಿರೋಧದ ನಡುವೆ ಪಠ್ಯ ಪುಸ್ತಕ ಪರಿಷ್ಕರಣೆ (Textbook Revision) ಮಾಡಿ ರಾಜ್ಯ ಸರ್ಕಾರ ಆದೇಶ ಹೊರಡಿಸಿದೆ. 6 ರಿಂದ 10ನೇ ತರಗತಿಯ ಕನ್ನಡ ಭಾಷೆ ಪಾಠ ಹಾಗೂ ಸಮಾಜ ವಿಜ್ಞಾನ ಪುಸ್ತಕಗಳಲ್ಲಿ ಕೆಲ ಪರಿಷ್ಕರಣೆ ಮಾಡಲಾಗಿದೆ.

ಪ್ರಮುಖವಾಗಿ 10ನೇ ತರಗತಿಯ ಕನ್ನಡ ಭಾಷಾ ಪುಸ್ತಕದಲ್ಲಿ ಕೇಶವ ಬಲಿರಾಂ ಹೆಡಗೇವಾರ್‌ ರಚನೆಯ ʼನಿಜವಾದ ಆದರ್ಶ ಪುರುಷ ಯಾರಾಗಬೇಕುʼ ಎಂಬ ಗದ್ಯಕ್ಕೆ ಬದಲಾಗಿ ಶಿವಕೋಟ್ಯಾಚಾರ್ಯರ ʼಸುಕುಮಾರ ಸ್ವಾಮಿಯ ಕಥೆʼ ಸೇರ್ಪಡೆ ಮಾಡಲಾಗಿದೆ. ಅದೇ ರೀತಿ ಚಕ್ರವರ್ತಿ ಸೂಲಿಬೆಲೆ ರಚನೆಯ ʼತಾಯಿ ಭಾರತೀಯ ಅಮರ ಪುತ್ರರುʼ ಗದ್ಯ ಪೂರ್ಣವಾಗಿ ಕೈಬಿಡಲಾಗಿದೆ.

ಇದನ್ನೂ ಓದಿ | Rice Politics: ತೆಲಂಗಾಣದಲ್ಲೂ ಅಕ್ಕಿ ಇಲ್ವಂತೆ; 7-8 ಕೆಜಿಗೆ ಇಳಿಯುತ್ತಾ ಅನ್ನಭಾಗ್ಯ?

2023-24ನೇ ಸಾಲಿನ ಪಠ್ಯಪುಸ್ತಕಗಳಲ್ಲಿ ಸರ್ಕಾರದ ಆದೇಶದ ಮೇರೆಗೆ ವಿಷಯ ತಜ್ಞರು ಪರಿಶೀಲನೆ ನಡೆಸಿ, ಕೆಲವು ಮಾರ್ಪಾಡುಗಳಿಗೆ ಸೂಚಿಸಿದ್ದಾರೆ. ಅದರಂತೆ ರಾಜ್ಯ ಸರ್ಕಾರ ಪಠ್ಯ ಪುಸ್ತಕಗಳ ಪರಿಷ್ಕರಣೆಗೆ ಮುಂದಾಗಿದೆ. ಕನ್ನಡ ಭಾಷೆಯಲ್ಲಿ 9 ಪಾಠ ಕೈಬಿಟ್ಟು ಅವುಗಳ ಸ್ಥಾನಕ್ಕೆ ಹೊಸ ಗದ್ಯ ಸೇರ್ಪಡೆ ಮಾಡಿದ್ದು, ಸಮಾಜ ವಿಜ್ಞಾನ ಪುಸ್ತಕಗಳಲ್ಲಿ 9 ಪಾಠಗಳಲ್ಲಿ ಕೆಲ ವಾಕ್ಯಗಳಿಗೆ ತಿದ್ದುಪಡಿ ಮಾಡಲಾಗಿದೆ.

ಕ್ಷಣ ಕ್ಷಣದ ಮಾಹಿತಿಗಾಗಿ Vistara News FaceBook ಪೇಜ್ ಫಾಲೋ ಮಾಡಿ
ಮಹತ್ವದ ಮಾಹಿತಿಗಾಗಿ ವಿಸ್ತಾರ ನ್ಯೂಸ್ ಆ್ಯಪ್ ಉಚಿತವಾಗಿ ಡೌನ್ ಲೋಡ್ ಮಾಡಿಕೊಳ್ಳಿ: Andriod App | IOS App
Continue Reading
Click to comment

Leave a Reply

Your email address will not be published. Required fields are marked *

ಕರ್ನಾಟಕ

Renuka Swamy Murder Case: ರೇಣುಕಾಸ್ವಾಮಿ ಕೊಲೆ ಕೇಸ್‌ ಖಂಡಿಸಿ ನಾಳೆ ಚಿತ್ರದುರ್ಗದಲ್ಲಿ ಬೃಹತ್‌ ಪ್ರತಿಭಟನೆ

Renuka Swamy Murder Case: ಚಿತ್ರದುರ್ಗದ ನೀಲಕಂಠೇಶ್ವರ ದೇಗುಲದಿಂದ ಡಿಸಿ ಕಚೇರಿವರೆಗೆ ವಿವಿಧ ಸಂಘಟನೆಗಳು ಪ್ರತಿಭಟನಾ ಮೆರವಣಿಗೆ ತೆರಳಿ ಹೋರಾಟ ನಡೆಸಲಿವೆ.

VISTARANEWS.COM


on

Renuka Swamy Murder Case
Koo

ಚಿತ್ರದುರ್ಗ: ರೇಣುಕಾ ಸ್ವಾಮಿ ಕೊಲೆ ಪ್ರಕರಣ (Renuka Swamy Murder Case) ಖಂಡಿಸಿ ನಾಳೆ (ಜೂನ್‌ 12) ನಗರದಲ್ಲಿ ಬೃಹತ್ ಪ್ರತಿಭಟನೆ ನಡೆಸಲು ವಿವಿಧ ಸಂಘಟನೆಗಳು ತೀರ್ಮಾನಿಸಿವೆ. ನಗರದ ನೀಲಕಂಠೇಶ್ವರ ದೇಗುಲದಿಂದ ಡಿಸಿ ಕಚೇರಿವರೆಗೆ ಪ್ರತಿಭಟನೆ ಮೆರವಣಿಗೆ ತೆರಳಿ ಪ್ರತಿಭಟನಾಕಾರರು ಹೋರಾಟ ನಡೆಸಲಿದ್ದು, ಈ ವೇಳೆ ಬೇಡ ಜಂಗಮ ಸಮುದಾಯದ ಮುಖಂಡರು, ವಿವಿಧ ಪಕ್ಷ, ಸಂಘಟನೆಗಳ ಪಕ್ಷಗಳ ಕಾರ್ಯಕರ್ತರು ಭಾಗಿಯಾಗಲಿದ್ದಾರೆ.

ಬೃಹತ್ ಪ್ರತಿಭಟನೆಯಲ್ಲಿ 1000ಕ್ಕೂ ಹೆಚ್ಚು ಜನರು ಭಾಗಿಯಾಗುವ ಸಾಧ್ಯತೆ ಇದೆ. ಪ್ರಕರಣವನ್ನು ಸಿಬಿಐಗೆ ನೀಡುವಂತೆ ಪ್ರತಿಭಟನೆಯಲ್ಲಿ ಒತ್ತಾಯಿಸಲಿದ್ದಾರೆ.

ಪ್ರಕರಣವನ್ನು ಸಿಬಿಐಗೆ ವಹಿಸಲು ಒತ್ತಾಯ

ಚಿತ್ರದುರ್ಗದ ರೇಣುಕಾ ಸ್ವಾಮಿ ಕೊಲೆ ಪ್ರಕರಣದಲ್ಲಿ ನಟ ದರ್ಶನ್‌ ಹಾಗೂ ಗೆಳತಿ ಪವಿತ್ರಗೌಡ ಸೇರಿ 13 ಮಂದಿ ಬಂಧನವಾಗಿದ್ದಾರೆ. ಇದೀಗ ಪ್ರಕರಣವನ್ನು ಸಿಬಿಐಗೆ ನೀಡುವಂತೆ ಬೇಡ ಜಂಗಮ ಸಮುದಾಯದ ಜಿಲ್ಲಾಧ್ಯಕ್ಷ ಎಂ.ಟಿ ಮಲ್ಲಿಕಾರ್ಜುನ ಸ್ವಾಮಿ ಒತ್ತಾಯಿಸಿದ್ದಾರೆ.

ಪೊಲೀಸರು ಆರೋಪಿಗಳನ್ನು ತನಿಖೆ ಮಾಡುವುದು ಬೇಡ. ದರ್ಶನ್ ಪ್ರಭಾವಿಯಾಗಿದ್ದು, ಪ್ರಭಾವ ಬೀರಿ ಹೊರಗೆ ಬರಬಹುದು. ಹೀಗಾಗಿ ಈ ಪ್ರಕರಣವನ್ನು ಸಿಬಿಐಗೆ ಕೊಡಿ ಎಂದು ಒತ್ತಾಯಿಸಿದ್ದಾರೆ. ನಮ್ಮ ಸಮುದಾಯದ ಸ್ವಾಮೀಜಿಗಳು ಕರೆ ಮಾಡಿ ಮಾಹಿತಿ ಪಡೆದಿದ್ದಾರೆ. ಅವರೊಟ್ಟಿಗೆ ಚರ್ಚಿಸಿ ಮುಂದಿನ ಕ್ರಮವಹಿಸಲಾಗುತ್ತದೆ ಎಂದರು.

ಇದನ್ನೂ ಓದಿ | Actor Darshan : ಪವಿತ್ರಗೌಡ ಬಗ್ಗೆ ಪೋಸ್ಟ್‌ ಮಾಡಿದ್ರೆ ನಿಮಗ್ಯಾಕೆ ಕೋಪ? ದರ್ಶನ್‌ಗೆ ಪೊಲೀಸರ ಪ್ರಶ್ನೆಗಳ ಸುರಿಮಳೆ

ಮೃತನ ಕುಟುಂಬಸ್ಥರಿಗೆ ಭಾವನಾ ಬೆಳಗೆರೆ ಸಾಂತ್ವನ

ರೇಣುಕಾ ಸ್ವಾಮಿ ಮನೆಗೆ ಹಾಯ್ ಬೆಂಗಳೂರು ಪತ್ರಿಕೆ ಸಂಪಾದಕಿ ಭಾವನಾ ಬೆಳಗೆರೆ ಭೇಟಿ ನೀಡಿದ್ದರು. ಹಿರಿಯೂರು ಖಾಸಗಿ ಕಾರ್ಯಕ್ರಮಕ್ಕೆ ಬಂದಿದ್ದ ಭಾವನಾ, ವಿಷಯ ತಿಳಿದು ರೇಣುಕಾಸ್ವಾಮಿ ಮನೆಗೆ ಭೇಟಿ ಕೊಟ್ಟರು. ಮೃತನ ಪತ್ನಿ ಸಹನಾಗೆ ಸಾಂತ್ವನ ಹೇಳಿದ್ದಾರೆ.

ಏನಿದು ಪ್ರಕರಣ?

ಚಿತ್ರದುರ್ಗ ಮೂಲದ ರೇಣುಕಾಸ್ವಾಮಿ (28) ಎಂಬವರನ್ನು ಕೊಲೆ ಪ್ರಕರಣದಲ್ಲಿ ಸ್ಯಾಂಡಲ್‌ವುಟ್‌ ನಟ, ಚಾಲೆಂಜಿಂಗ್‌ ಸ್ಟಾರ್‌ ದರ್ಶನ್‌ (Actor Darshan) ಅವರನ್ನು ಪೊಲೀಸರು ಬಂಧಿಸಿದ್ದಾರೆ. ಮೈಸೂರಿನಲ್ಲಿರುವ (Mysore) ದರ್ಶನ್‌ ಅವರ ತೋಟದ ಮನೆಯಲ್ಲಿ ಬೆಂಗಳೂರಿನ ಪೊಲೀಸರು ದರ್ಶನ್‌ ಅವರನ್ನು ಬಂಧಿಸಲಾಗಿದೆ.

ಪವಿತ್ರಾ ಗೌಡ ಅವರಿಗೆ ಅಶ್ಲೀಲವಾಗಿ ಮೆಸೇಜ್‌ ಮಾಡಿದ ಹಿನ್ನೆಲೆಯಲ್ಲಿ ದರ್ಶನ್‌ ಆಪ್ತರು ಜೂನ್‌ 8ರಂದು ರೇಣುಕಾಸ್ವಾಮಿ ಮೇಲೆ ಮಾರಣಾಂತಿಕವಾಗಿ ಹಲ್ಲೆ ನಡೆಸಿದ್ದರು. ಬಳಿಕ ಶವವನ್ನು ಎಸೆದು ಹೋಗಿದ್ದರು. ಬೆಂಗಳೂರಿನ ಆರ್‌.ಆರ್‌.ನಗರದ ಸುಮನಹಳ್ಳಿಯ ರಾಜಕಾಲುವೆ ಬಳಿ ಜೂನ್‌ 9ರಂದು ಬೀದಿ ನಾಯಿಗಳು ಕಸ ಎಳೆದಾಡುವಾಗ ಶವ ಪತ್ತೆಯಾಗಿತ್ತು. ಇದಾದ ಬಳಿಕ ಅದೇ ದಿನ ರಾಮ್‌ ದೋರ್‌ ಎಂಬ ಸೆಕ್ಯುರಿಟಿ ಗಾರ್ಡ್‌ ಪೊಲೀಸರಿಗೆ ದೂರು ನೀಡಿದ್ದರು. ಪೊಲೀಸರು ಆಗಮಿಸಿದ ವೇಳೆ ಶವದ ಮುಖ, ತಲೆ, ಕಿವಿಗೆ ರಕ್ತಗಾಯವಾಗಿರುವುದು ಕಂಡು ಬಂದಿತ್ತು. ಯಾರೋ‌ ಕೊಲೆ ಮಾಡಿ ತಂದು ಬಿಸಾಡಿರೋ ಅನುಮಾನದ ಮೇಲೆ ಪೊಲೀಸರು ದೂರು ದಾಖಲಿಸಿ ತನಿಖೆ ಕೈಗೆತ್ತಿಕೊಂಡಿದ್ದರು. ಈ ವೇಳೆ ಇದು ರೇಣುಕಾಸ್ವಾಮಿ ಶವ ಎನ್ನುವುದು ತಿಳಿದು ಬಂದಿತ್ತು.

ಈ ಪ್ರಕರಣದಲ್ಲಿ ಸೋಮವಾರ ಗಿರಿನಗರ ಮೂಲದ ಮೂವರು ಆರೋಪಿಗಳು ಸರೆಂಡರ್ ಆಗಿದ್ದರು. ಹಣಕಾಸು ವಿಚಾರವಾಗಿ ಕೊಲೆ ಮಾಡಿದ್ದಾಗಿ ಹೇಳಿದ್ದರು. ಪೊಲೀಸರಿಗೆ ಅನುಮಾನ ಬಂದು ತೀವ್ರ ವಿಚಾರಣೆ ಮಾಡಿದಾಗ ದರ್ಶನ್ ಹೆಸರು ಬಾಯಿ ಬಿಟ್ಟಿದ್ದಾರೆ. ಹೀಗಾಗಿ ನಟ ದರ್ಶನ್‌, ಪವಿತ್ರಾ ಗೌಡ ಸೇರಿ 13 ಆರೋಪಿಗಳನ್ನು ಪೊಲೀಸರು ಅನ್ನಪೂರ್ಣೇಶ್ವರಿ ನಗರ ಪೊಲೀಸರು ಬಂಧಿಸಿದ್ದಾರೆ.

ಇದನ್ನೂ ಓದಿ | Actor Darshan: ರೇಣುಕಾ ಸ್ವಾಮಿ ಕೊಲೆ ಕೇಸ್‌ನಲ್ಲಿ ದರ್ಶನ್‌ ಅರೆಸ್ಟ್‌; ಪ್ರಕರಣವನ್ನು ಸಿಬಿಐಗೆ ವಹಿಸಲು ಒತ್ತಾಯ

ನಟ ದರ್ಶನ್‌, ಪವಿತ್ರಾ ಗೌಡ, ಕೆ. ಪವನ್, ಪ್ರದೋಶ್, ನಂದೀಶ್, ಕೇಶವಮೂರ್ತಿ, ರಾಘವೇಂದ್ರ, ಎಂ.ಲಕ್ಷ್ಮಣ್, ದೀಪಕ್ ಕುಮಾರ್, ಕಾರ್ತಿಕ್, ಆರ್.ನಾಗರಾಜ್, ವಿ.ವಿನಯ್‌, ನಿಖಿಲ್‌ ನಾಯಕ್‌ ಬಂಧಿತ ಆರೋಪಿಗಳಾಗಿದ್ದಾರೆ.

Continue Reading

ಕರ್ನಾಟಕ

CM Siddaramaiah: ಅಬಕಾರಿ ಪರವಾನಗಿ ನವೀಕರಣಕ್ಕೆ ಕಿರುಕುಳ ನೀಡಬೇಡಿ: ಅಧಿಕಾರಿಗಳಿಗೆ ಸಿಎಂ ಖಡಕ್‌ ಸೂಚನೆ

CM Siddaramaiah: ಬೆಂಗಳೂರಿನಲ್ಲಿ ಸಿಎಂ ಸಿದ್ದರಾಮಯ್ಯ ನೇತೃತ್ವದಲ್ಲಿ ಅಬಕಾರಿ ಇಲಾಖೆಯ ಪ್ರಗತಿ ಪರಿಶೀಲನಾ ಸಭೆ ಮಂಗಳವಾರ ನಡೆದಿದೆ.

VISTARANEWS.COM


on

CM Siddaramaiah
Koo

ಬೆಂಗಳೂರು: ಅಬಕಾರಿ ಪರವಾನಗಿಗಳ ನವೀಕರಣಕ್ಕೆ ಸನ್ನದುದಾರರಿಗೆ ಕಿರುಕುಳ ನೀಡಬಾರದು. ನೆರೆ ರಾಜ್ಯಗಳಿಂದ ಕರ್ನಾಟಕ ರಾಜ್ಯಕ್ಕೆ ಕಳ್ಳಸಾಗಾಣಿಕೆ ಮೂಲಕ ನುಸುಳುವ ಮದ್ಯವನ್ನು ಕಡ್ಡಾಯ ತಡೆಗಟ್ಟಬೇಕು ಎಂದು ಅಬಕಾರಿ ಇಲಾಖೆ ಅಧಿಕಾರಿಗಳಿಗೆ ಮುಖ್ಯಮಂತ್ರಿ ಸಿದ್ದರಾಮಯ್ಯ (CM Siddaramaiah) ಖಡಕ್‌ ಸೂಚನೆ ನೀಡಿದರು.

ನಗರದಲ್ಲಿ ಮಂಗಳವಾರ ಅಬಕಾರಿ ಇಲಾಖೆಯ ಪ್ರಗತಿ ಪರಿಶೀಲನಾ ಸಭೆ ನಡೆಸಿದ ಅವರು, ಇಲಾಖೆಯ ತೆರಿಗೆ ಸಂಗ್ರಹ ಸಾಮರ್ಥ್ಯವನ್ನು ಆಧರಿಸಿಯೇ ನಿಗದಿ ಪಡಿಸುವ ಗುರಿ ತಲುಪಲು ಅಧಿಕಾರಿಗಳು ಗರಿಷ್ಠ ಪ್ರಯತ್ನ ಮಾಡಬೇಕು ಎಂದು ತಿಳಿಸಿದರು.

ಚುನಾವಣಾ ನೀತಿ ಸಂಹಿತೆ ಕಾರಣದಿಂದ ತೆರಿಗೆ ಸಂಗ್ರಹ ಬೆಳವಣಿಗೆ ದರ ನಿರೀಕ್ಷಿತ ಮಟ್ಟ ತಲುಪಿಲ್ಲ ಎಂದು ಅಧಿಕಾರಿಗಳು ಮಾಹಿತಿ ನೀಡಿದರು. ಇದಕ್ಕೆ ಸಿಎಂ ಸ್ಪಂದಿಸಿ, ಮುಂದಿನ ದಿನಗಳಲ್ಲಿ ಇದನ್ನು ಭರ್ತಿ ಮಾಡುವಂತೆ ಸೂಚಿಸಿದರು.

ಇದನ್ನೂ ಓದಿ | Mohan Bhagwat: ಜನ ಸೇವಕ ಎಂದಿಗೂ ಅಹಂಕಾರಿ ಆಗಿರುವುದಿಲ್ಲ: ಮೋಹನ್‌ ಭಾಗವತ್‌

ಇಲಾಖೆಯಲ್ಲಿ ಕಾನ್ಸ್‌ಟೇಬಲ್‌, ಸಬ್‌ ಇನ್ಸ್‌ಪೆಕ್ಟರ್‌ಗಳ ನೇಮಕಾತಿ ಹಾಗೂ ವಾಹನಗಳ ಅಗತ್ಯತೆ ಕುರಿತಂತೆ ಸರ್ಕಾರಕ್ಕೆ ಪ್ರಸ್ತಾವನೆ ಸಲ್ಲಿಸುವಂತೆ ಮುಖ್ಯಮಂತ್ರಿಗಳು ಸೂಚಿಸಿದರು. ಕರ ಸಮಾಧಾನ ಯೋಜನೆಯಡಿ 5.10 ಕೋಟಿ ರೂ. ವಸೂಲಾಗಿದ್ದು, ಯೋಜನೆಯನ್ನು ಇನ್ನಷ್ಟು ಕಾಲ ವಿಸ್ತರಿಸುವಂತೆ ಅಧಿಕಾರಿಗಳು ಕೋರಿದರು.

ಇದೇ ವೇಳೆ ಅಬಕಾರಿ ಇಲಾಖೆಯ ವ್ಯವಹಾರಗಳನ್ನು ಸರಳಗೊಳಿಸುವ ನೂತನ ತಂತ್ರಾಂಶವನ್ನು ಲೋಕಾರ್ಪಣೆ ಮಾಡಿದರು. ಆನ್‌ಲೈನ್‌ನಲ್ಲಿಯೇ ಇಲಾಖೆಯ ಸೇವೆಗಳನ್ನು ಒದಗಿಸುವ ಹಾಗೂ ಅಬಕಾರಿ ಇಲಾಖೆಗೆ ಸಂಬಂಧಿಸಿದ ನಿಯಮ ಉಲ್ಲಂಘನೆ ಹಾಗೂ ಅಕ್ರಮದ ಪ್ರಕರಣಗಳು ಹಾಗೂ ಅಧಿಕಾರಿಗಳ ತಪಾಸಣೆಯನ್ನೂ ಇದರಲ್ಲಿ ದಾಖಲಿಸಲು ಹಾಗೂ ಅನುಸರಿಸಲು ಅವಕಾಶವನ್ನು ಇದರಲ್ಲಿ ಕಲ್ಪಿಸಲಾಗಿದೆ.

ಇದನ್ನೂ ಓದಿ | HD Kumaraswamy: ಎಚ್‌ಡಿಕೆ ಭೇಟಿಯಾದ ಉಕ್ಕು ಪ್ರಾಧಿಕಾರದ ಅಧ್ಯಕ್ಷ; ವಿಐಎಸ್‌ಎಲ್ ಪುನಶ್ಚೇತನದ ಬಗ್ಗೆ ಚರ್ಚೆ

ಅಬಕಾರಿ ಸಚಿವ ಆರ್. ಬಿ. ತಿಮ್ಮಾಪುರ, ಮುಖ್ಯಮಂತ್ರಿಗಳ ಆರ್ಥಿಕ ಸಲಹೆಗಾರ ಬಸವರಾಜ ರಾಯರೆಡ್ಡಿ, ರಾಜಕೀಯ ಕಾರ್ಯದರ್ಶಿಗಳಾದ ಗೋವಿಂದರಾಜು ಹಾಗೂ ನಸೀರ್ ಅಹ್ಮದ್, ಆರ್ಥಿಕ ಇಲಾಖೆ ಅಪರ ಮುಖ್ಯ ಕಾರ್ಯದರ್ಶಿ ಎಲ್.ಕೆ.ಅತೀಕ್, ಆರ್ಥಿಕ ಇಲಾಖೆ ಕಾರ್ಯದರ್ಶಿ ಪಿ.ಸಿ.ಜಾಫರ್, ಅಬಕಾರಿ ಇಲಾಖೆಯ ಆಯುಕ್ತ ಡಾ.ರವಿಶಂಕರ್ ಉಪಸ್ಥಿತರಿದ್ದರು.

Continue Reading

ಮಳೆ

Karnataka Weather : ಭಾರಿ ಮಳೆಗೆ ಗುಡ್ಡದಿಂದ ಉರುಳಿ ಬಿದ್ದ ಬಂಡೆಗಲ್ಲು; ಬೆಂಗಳೂರಲ್ಲೂ ಸಂಜೆ ವರ್ಷಧಾರೆ

Rain News : ರಾಜ್ಯದ ಹಲವೆಡೆ ಭಾರಿ ಮಳೆಯಾಗುತ್ತಿದ್ದು (Karnataka Weather Forecast), ಕಾರವಾರದ ಟನಲ್‌ ಎದುರು ಗುಡ್ಡ ಕುಸಿತ ಭೀತಿ ಹೆಚ್ಚಾಗುತ್ತಿದೆ. ಬಂಡೆಗಲ್ಲುಗಳು ರಸ್ತೆಗೆ ಉರುಳಿ ಬೀಳುತ್ತಿದ್ದು, ಸವಾರರು ಪ್ರಾಣ ಭಯದಲ್ಲೇ ಓಡಾಡುವಂತಾಗಿದೆ.

VISTARANEWS.COM


on

By

karnataka weather Forecast
Koo

ಕಾರವಾರ/ ಕಲಬುರಗಿ: ಕರಾವಳಿಯಲ್ಲಿ ವ್ಯಾಪಕ (Rain News) ಮಳೆಯಾಗುತ್ತಿದ್ದು, ಅವಾಂತರಗಳು ಮುಂದುವರಿದಿದೆ. ಉತ್ತರ ಕನ್ನಡದ ಕಾರವಾರ ರಾಷ್ಟ್ರೀಯ ಹೆದ್ದಾರಿ 66ರ ಬಿಣಗಾ ಸುರಂಗದಲ್ಲಿ ಮತ್ತೆ ಗುಡ್ಡ ಕುಸಿತ ಭೀತಿ ಎದುರಾಗಿದೆ. ಟನಲ್ ಎದುರು ಗುಡ್ಡದಿಂದ ಬಂಡೆಗಲ್ಲುಗಳು ರಸ್ತೆಗೆ ಉರುಳಿ ಬೀಳುತ್ತಿವೆ. ಭಾರೀ ಮಳೆಗೆ (Karnataka weather Forecast) ಟನಲ್ ಮೇಲ್ಭಾಗದ ಮಣ್ಣು ಸಡಿಲಗೊಂಡಿದ್ದು, ಬಂಡೆಗಲ್ಲು ಬೀಳುತ್ತಿವೆ.

ಐಆರ್‌ಬಿ ಅವೈಜ್ಞಾನಿಕ ಕಾಮಗಾರಿಯಿಂದಾಗಿ ಹೆದ್ದಾರಿಯಲ್ಲೂ ಗುಡ್ಡ ಕುಸಿತ ಭೀತಿ ಎದುರಾಗಿದೆ. ವಾಹನ ಸವಾರರು ಆತಂಕದಲ್ಲೇ ಹೆದ್ದಾರಿಯಲ್ಲಿ ಸಾಗುವಂತಾಗಿದೆ. ಕಳೆದ 10 ವರ್ಷಗಳಿಂದ ಕಾರವಾರದಿಂದ ಭಟ್ಕಳವರೆಗೂ ಹೆದ್ದಾರಿ ಅಗಲೀಕರಣ ಕಾಮಗಾರಿ ನಡೆಯುತ್ತಿದ್ದು, ಪೂರ್ಣಗೊಂಡಿಲ್ಲ. ಹೆದ್ದಾರಿ ಅಗಲೀಕರಣ ನಡೆಸುತ್ತಿರುವ ಐಆರ್‌ಬಿ ಕಂಪೆನಿ ವಿರುದ್ಧ ಸಾರ್ವಜನಿಕರು ಆಕ್ರೋಶ ಹೊರಹಾಕಿದ್ದಾರೆ.

ಬೆಂಗಳೂರು, ಕಲಬುರಗಿಯಲ್ಲಿ ಭಾರಿ ಮಳೆ

ರಾಜಧಾನಿ ಬೆಂಗಳೂರಲ್ಲಿ ಮಂಗಳವಾರ ಸಂಜೆ ವೇಳೆಗೆ ಮಳೆಯಾಗಿದೆ. ಅನ್ನಪೂರ್ಣೇಶ್ವರಿ ನಗರ, ಲಗ್ಗೆರೆ, ಸುಂಕದಕಟ್ಟೆ, ವಿಧಾನಸೌಧ, ಮೆಜೆಸ್ಟಿಕ್‌, ಶಿವಾಜಿನಗರ ಸೇರಿದಂತೆ ಹಲವೆಡೆ ಮಳೆಯಾಗಿದೆ. ಇತ್ತ ಕಲಬುರಗಿ ಜಿಲ್ಲೆಯ ಜೇವರ್ಗಿ ತಾಲೂಕಿನಾದ್ಯಂತ ಭಾರಿ ಮಳೆಯಾಗುತ್ತಿದ್ದು, ಹಳ್ಳ-ಕೊಳ್ಳಗಳು ತುಂಬಿ ಹರಿಯುತ್ತಿದೆ. ಯಡ್ರಾಮಿ ತಾಲೂಕಿನ ವರವಿ-ಕುಕನೂರು ಮಾರ್ಗದಲ್ಲಿ ಹಳ್ಳ ದಾಟಲು ಗ್ರಾಮಸ್ಥರು ಹರಸಾಹಸ ಪಡುವಂತಾಗಿದೆ.

ಜಮೀನಿನಲ್ಲಿ ಬಿತ್ತನೆ ‌ಕಾರ್ಯ ಮುಗಿಸಿ ‌ಮನೆಗೆ ತೆರಳುವಾಗ ರೈತರು ಹಗ್ಗ ಹಿಡಿದು ಹಳ್ಳದಾಟುತ್ತಿದ್ದಾರೆ. ಪ್ರತಿಬಾರಿ ಮಳೆಗಾಲದಲ್ಲೂ ಇದೇ ರೀತಿ ಸಮಸ್ಯೆ ಎದುರಾಗಿದೆ ಎಂದು ಅಸಮಾಧಾನ ಹೊರಹಾಕಿದ್ದಾರೆ. ಕೊಪ್ಪಳದಲ್ಲೂ ಮಳೆ ಸುರಿದಿದೆ. ಕೊಪ್ಪಳ ನಗರ ಸೇರಿದಂತೆ ಸುತ್ತಮುತ್ತ ಬೆಳಿಗ್ಗೆಯಿಂದಲೂ ಮೋಡ ಕವಿದ ವಾತಾವರಣವಿತ್ತು. ಮಧ್ಯಾಹ್ನ ಆಗುತ್ತಿದ್ದಂತೆ ಮಳೆಯ ಸಿಂಚನವಾಗಿದೆ. ನಿತ್ಯವೂ ಆಗಾಗ ಮಳೆ ಬೀಳುತ್ತಿದ್ದು, ಕೃಷಿ ಚಟುವಟಿಕೆಗಳಿಗೆ ಕೊಂಚ ಹಿನ್ನಡೆಯಾಗಿದೆ.

ಇದನ್ನೂ ಓದಿ: Actor Darshan: ರೇಣುಕಾ ಸ್ವಾಮಿ ಕೊಲೆ ಕೇಸ್‌ನಲ್ಲಿ ದರ್ಶನ್‌ ಅರೆಸ್ಟ್‌; ಪ್ರಕರಣವನ್ನು ಸಿಬಿಐಗೆ ವಹಿಸಲು ಒತ್ತಾಯ

ನಾಳೆ, ನಾಡಿದ್ದು ಅಲ್ಪ ಮಳೆ

ರಾಜ್ಯದ ಹಲವೆಡೆ ಮಳೆ ಅಬ್ಬರ ತಗ್ಗಿದೆ. ಇನ್ನೊಂದು ವಾರ ಪ್ರತ್ಯೇಕ ಕಡೆಗಳಲ್ಲಿ ಮಳೆಯಾಗುವ ಸಾಧ್ಯತೆ ಇದೆ. ಜೂ.12ರಂದು‌ ಕರಾವಳಿಯ ದಕ್ಷಿಣ ಕನ್ನಡ, ಉಡುಪಿಯಲ್ಲಿ ಗುಡುಗು ಸಹಿತ ಭಾರಿ ಮಳೆಯಾಗುವ ಸಾಧ್ಯತೆ ಇದೆ. ಉತ್ತರ ಕನ್ನಡದ ಹೆಚ್ಚಿನ ಸ್ಥಳಗಳಲ್ಲಿ ಹಗುರದಿಂದ ಸಾಧಾರಣ ಮಳೆಯಾಗುವ ನಿರೀಕ್ಷೆ ಇದೆ. ಉತ್ತರ ಒಳನಾಡಿನ ಬೀದರ್‌, ವಿಜಯಪುರ, ಯಾದಗಿರಿ, ಕಲಬುರಗಿ ಹಾಗೂ ಮಲೆನಾಡಿನ ಚಿಕ್ಕಮಗಳೂರು ಭಾಗದಲ್ಲಿ ಗುಡುಗು ಸಹಿತ ಮಳೆ ಜತೆಗೆ ಗಾಳಿಯು ಗಂಟೆಗೆ 30-40 ಕಿ.ಮೀ ವ್ಯಾಪ್ತಿಯಲ್ಲಿ ಬೀಸಲಿದೆ.

ಜೂನ್‌ 13ರಂದು ಉತ್ತರ ಕನ್ನಡದಲ್ಲಿ ಭಾರಿ ಮಳೆಯಾಗಲಿದೆ. ಕರಾವಳಿ, ಉತ್ತರ ಒಳನಾಡು, ದಕ್ಷಿಣ ಒಳನಾಡಿನ ಹಲವೆಡೆ ಹಗುರದಿಂದ ಸಾಧಾರಣ ಮಳೆಯಾಗುವ ಸಾಧ್ಯತೆ ಇದೆ. ಇನ್ನೂ ಬೆಂಗಳೂರು ಸುತ್ತಮುತ್ತ ಆಗಾಗ ಸಾಮಾನ್ಯವಾಗಿ ಮೋಡ ಕವಿದ ವಾತಾವರಣ ಇರಲಿದೆ. ಮಧ್ಯಾಹ್ನ ಅಥವಾ ಸಂಜೆ ವೇಳೆಗೆ ಗುಡುಗು ಸಹಿತ ಮಳೆಯಾಗಬಹುದು ಅಂದಾಜಿಸಲಾಗಿದೆ. ಗರಿಷ್ಠ ಹಾಗೂ ಕನಿಷ್ಠ ಉಷ್ಣಾಂಶವು ಕ್ರಮವಾಗಿ 29, 21 ಡಿ.ಸೆ ಇರಲಿದೆ.

ಈ ಸಂಗತಿಯ ಕುರಿತು ನಿಮ್ಮ ಅನಿಸಿಕೆ ಏನು? ಕಾಮೆಂಟ್ ಮೂಲಕ ತಿಳಿಸಿ

Continue Reading

ಪ್ರಮುಖ ಸುದ್ದಿ

Free Bus Problem: ನಮಗೆ ಫ್ರೀ ಬಸ್‌ ಬೇಡ, ವಿದ್ಯೆ ಬೇಕು! ಈ ವಿದ್ಯಾರ್ಥಿನಿ ಮಾತಿನ ವಿಡಿಯೊ ನೋಡಿ

Free Bus Problem: ಸರ್ಕಾರದ ಇಂತಹ ಫ್ರೀ ಬಸ್ ಅವ್ಯವಸ್ಥೆಯ ವಿರುದ್ಧ ಇದೀಗ ವಿದ್ಯಾರ್ಥಿಯೊಬ್ಬಳು ಕಿಡಿಕಾರಿದ್ದಾಳೆ. ವಿದ್ಯಾರ್ಥಿನಿಯೊಬ್ಬಳಿಗೆ ಬಸ್ಸು ಸರಿಯಾದ ಸಮಯಕ್ಕೆ ಸಿಗದ ಕಾರಣ ಸರ್ಕಾರಿ ಅಧಿಕಾರಿಗಳ ಕಚೇರಿಗೆ ತಮ್ಮ ಸಹಪಾಠಿಗಳ ಜೊತೆ ಹೋಗಿ ಸರ್ಕಾರದ ಆಡಳಿತ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದ್ದಾಳೆ.

VISTARANEWS.COM


on

Free Bus Problem
Koo

ಕುಂದಾಪುರ: ಮಳೆಗಾಲ ಬಂತೆಂದರೆ ಒಂದಲ್ಲ ಒಂದು ಸಮಸ್ಯೆ ಕಾಡುತ್ತಿರುತ್ತದೆ. ರಸ್ತೆಯ ಸಮಸ್ಯೆ, ಬಸ್ಸಿನ ಸಮಸ್ಯೆ, ಚರಂಡಿ ಸಮಸ್ಯೆ ಹೀಗೆ ಹಲವಾರು ಸಮಸ್ಯೆಗಳು ಎದುರಾಗುತ್ತದೆ. ಇನ್ನು ಮಳೆಗಾಲದಲ್ಲಿ ಶಾಲಾ-ಕಾಲೇಜುಗಳಿಗೆ ಹೋಗುವ ವಿದ್ಯಾರ್ಥಿಗಳ ಪಾಡಂತೂ ಹೇಳತೀರದು. ಪಟ್ಟಣಗಳಿಗೆ ಹೋಲಿಸಿದರೆ ಹಳ್ಳಿಯಲ್ಲಿರುವ ವಿದ್ಯಾರ್ಥಿಗಳಿಗೆ (Student) ಈ ಮಳೆಗಾಲವೆಂದರೆ ವನವಾಸದ ಹಾಗೇ. ಕೆಲವು ಕಡೆಗಳಲ್ಲಿ ಬಸ್ಸುಗಳು ಸರಿಯಾದ ಸಮಯಕ್ಕೆ ಬರುವುದಿಲ್ಲ. ಅಲ್ಲಲ್ಲಿ ರಸ್ತೆಗಳು ಕೆಟ್ಟಿರುವ ಕಾರಣ ಬಸ್ಸು ಬರುವುದು ತಡವಾಗುತ್ತದೆ. ಇನ್ನು ರಾಜ್ಯದಲ್ಲಿ ಕಾಂಗ್ರೆಸ್ ಸರ್ಕಾರ ಅಧಿಕಾರಕ್ಕೆ ಬಂದಾಗ ಮಹಿಳೆಯರಿಗಾಗಿ ಫ್ರಿ ಬಸ್ (Free Bus Problem )ವ್ಯವಸ್ಥೆ ಮಾಡಿದೆ. ಈ ಬಿಟ್ಟಿ ಭಾಗ್ಯದ  ಬಸ್ ನಿಂದ ಕೆಲವು ಭಾಗದ ವಿದ್ಯಾರ್ಥಿಗಳಿಗೆ ಸಂಕಷ್ಟ ಎದುರಾಗಿದೆ. ಈ ಅವ್ಯವಸ್ಥೆ ಕುರಿತು ವಿದ್ಯಾರ್ಥಿಗಳು ಆಕ್ರೋಶಗೊಂಡಿದ್ದಾರೆ.

ರಾಷ್ಟ್ರೀಯ ಹೆದ್ದಾರಿಗಳಲ್ಲಿ ಬಸ್ಸುಗಳು 5-10 ನಿಮಿಷಕ್ಕೂ ಬರುತ್ತದೆ. ಇದರಿಂದ ಯಾವುದೇ ಸಮಸ್ಯೆ ಇಲ್ಲ. ಆದರೆ ಕೆಲವು ಒಳರಸ್ತೆಯಲ್ಲಿ ಬಸ್ಸುಗಳು ಗಂಟೆಗೊಂದು ಬರುತ್ತದೆ. ಇದರಿಂದ ವಿದ್ಯಾರ್ಥಿಗಳು ಬಸ್ಸಿನ ಸಮಸ್ಯೆಯಿಂದ ಒದ್ದಾಡುತ್ತಿದ್ದಾರೆ. ಇತ್ತೀಚೆಗೆ ರಾಜ್ಯದ  ಆಡಳಿತವನ್ನು ಕೈಗೆ ತೆಗೆದುಕೊಂಡ ಕಾಂಗ್ರೆಸ್ ಸರ್ಕಾರ ಮಹಿಳೆಯರಿಗಾಗಿ ಬಿಟ್ಟಿ ಭಾಗ್ಯಗಳನ್ನು ನೀಡಿದೆ. ಅದರಲ್ಲಿ ಫ್ರೀ ಬಸ್ ವ್ಯವಸ್ಥೆ ಕೂಡ ಒಂದು. ಈ ಫ್ರಿ ಬಸ್ ಭಾಗ್ಯದ ಯೋಜನೆ ಜಾರಿಗೆ ಬಂದ ಮೇಲಂತೂ ಸರ್ಕಾರ 10 ಬಸ್ಸು ಓಡಾಡುವ ಸ್ಥಳಗಳಲ್ಲಿ 3-4 ಬಸ್ಸುಗಳನ್ನು ಬಿಟ್ಟಿದ್ದಾರೆ. ಅಲ್ಲದೇ ಬಸ್ಸುಗಳಲ್ಲಿ ಸರಿಯಾದ ಸೀಟಿನ ವ್ಯವಸ್ಥೆ ಇಲ್ಲ, ಬಾಗಿಲು, ಕಿಟಕಿಗಳು ಸರಿಯಿಲ್ಲ. ಹಾಗೇ ಮಳೆಗಾಲದಲ್ಲಿ ಸೋರುವ ಬಸ್ಸುಗಳೇ ಹೆಚ್ಚು. ಬಸ್ಸಿನ ಸಮಸ್ಯೆಯಿಂದ ಸರಿಯಾದ ಸಮಯಕ್ಕೆ ಅವರಿಗೆ ಕಾಲೇಜಿಗೆ ತಲುಪಲು ಆಗುತ್ತಿಲ್ಲ. ಇದರಿಂದ ಅಂದಿನ ಕ್ಲಾಸ್ ಮಿಸ್ ಆಗಿ ಪರೀಕ್ಷೆಯಲ್ಲಿ ಓದಲು ಕಷ್ಟವಾಗುತ್ತದೆ ಎಂಬುದು ವಿದ್ಯಾರ್ಥಿಗಳ ಗೋಳು.

ಬಿಟ್ಟಿ ಭಾಗ್ಯ ಬೇಡವೇ ಬೇಡ!

ಸರ್ಕಾರದ ಇಂತಹ ಫ್ರೀ ಬಸ್ ಅವ್ಯವಸ್ಥೆಯ ವಿರುದ್ಧ ಇದೀಗ ವಿದ್ಯಾರ್ಥಿಯೊಬ್ಬಳು ಕಿಡಿಕಾರಿದ್ದಾಳೆ. ಎಳಬೇರು ಎಂಬ ಊರಿನಿಂದ ಬರುವ ವಿದ್ಯಾರ್ಥಿನಿಯೊಬ್ಬಳಿಗೆ ಬಸ್ಸು ಸರಿಯಾದ ಸಮಯಕ್ಕೆ ಸಿಗದ ಕಾರಣ ಸರ್ಕಾರಿ ಅಧಿಕಾರಿಗಳ ಕಚೇರಿಗೆ ತಮ್ಮ ಸಹಪಾಠಿಗಳ ಜೊತೆ ಹೋಗಿ ಸರ್ಕಾರದ ಆಡಳಿತ ವಿರುದ್ಧ ಕಿಡಿಕಾರಿದ್ದಾಳೆ. ಇಂತಹ ಅವ್ಯವಸ್ಥೆಯ ಫ್ರೀ ಬಸ್ ಯೋಜನೆ ನಮಗೆ ಬೇಡವೇ ಬೇಡ ಎಂದು ಆಕ್ರೋಶ ವ್ಯಕ್ತಪಡಿಸಿದ್ದಾಳೆ. ಹಾಗೆಯೇ ಈ ಬಗ್ಗೆ ಅಧಿಕಾರಿಗಳು ಸರಿಯಾದ ಕ್ರಮ ತೆಗೆದುಕೊಳ್ಳಬೇಕೆಂದು ಕೇಳಿಕೊಂಡಿದ್ದಾಳೆ.

ಇದನ್ನೂ ಓದಿ:Smartphone Charging Tips: ನಿಮ್ಮ ಸ್ಮಾರ್ಟ್ ಪೋನ್ ಬ್ಯಾಟರಿ ಹೆಚ್ಚು ಬಾಳಿಕೆ ಬರಲು ಹೀಗೆ ಮಾಡಿ

ಫೇಸ್ ಬುಕ್‌ನಲ್ಲಿ ಈ ವಿಡಿಯೋ ಪೋಸ್ಟ್ ಆಗಿದ್ದು, ಇದಕ್ಕೆ ಹಲವರು ಕಾಮೆಂಟ್ ಮಾಡಿದ್ದಾರೆ. ಹಲವರು ಆ ವಿದ್ಯಾರ್ಥಿನಿಗೆ ಬೆಂಬಲ ನೀಡಿದ್ದಾರೆ ಮತ್ತು ರಾಜ್ಯ ಸರ್ಕಾರದ ವಿರುದ್ಧ ಕಿಡಿಕಾರಿದ್ದಾರೆ.

Continue Reading
Advertisement
Renuka Swamy Murder Case
ಕರ್ನಾಟಕ4 mins ago

Renuka Swamy Murder Case: ರೇಣುಕಾಸ್ವಾಮಿ ಕೊಲೆ ಕೇಸ್‌ ಖಂಡಿಸಿ ನಾಳೆ ಚಿತ್ರದುರ್ಗದಲ್ಲಿ ಬೃಹತ್‌ ಪ್ರತಿಭಟನೆ

Raksha Khadse
ರಾಜಕೀಯ18 mins ago

Raksha Khadse: ಅಂದು ಪಂಚಾಯಿತಿ ಸದಸ್ಯೆ, ಇಂದು ಕೇಂದ್ರ ಸಚಿವೆ! ಯಾರು ಈ ರಕ್ಷಾ ಖಡ್ಸೆ?

Health Tips For Monsoon
ಆರೋಗ್ಯ45 mins ago

Health Tips For Monsoon: ಮಳೆಗಾಲಕ್ಕೆ ನಮ್ಮ ಆಹಾರ ಹೇಗಿರಬೇಕು?

Ayodhya's e-rickshaw
ಪ್ರಮುಖ ಸುದ್ದಿ48 mins ago

Ayodhya’s e-rickshaw : ಅಯೋಧ್ಯೆಯಲ್ಲಿ ಬಿಜೆಪಿಗೆ ಸೋಲು; ಪ್ರವಾಸಿಗರ ಸಂಖ್ಯೆ ಇಳಿಕೆ; ರಿಕ್ಷಾ ಚಾಲಕರಿಗೆ ಆದಾಯ ನಷ್ಟ!

CM Siddaramaiah
ಕರ್ನಾಟಕ53 mins ago

CM Siddaramaiah: ಅಬಕಾರಿ ಪರವಾನಗಿ ನವೀಕರಣಕ್ಕೆ ಕಿರುಕುಳ ನೀಡಬೇಡಿ: ಅಧಿಕಾರಿಗಳಿಗೆ ಸಿಎಂ ಖಡಕ್‌ ಸೂಚನೆ

karnataka weather Forecast
ಮಳೆ58 mins ago

Karnataka Weather : ಭಾರಿ ಮಳೆಗೆ ಗುಡ್ಡದಿಂದ ಉರುಳಿ ಬಿದ್ದ ಬಂಡೆಗಲ್ಲು; ಬೆಂಗಳೂರಲ್ಲೂ ಸಂಜೆ ವರ್ಷಧಾರೆ

Free Bus Problem
ಪ್ರಮುಖ ಸುದ್ದಿ1 hour ago

Free Bus Problem: ನಮಗೆ ಫ್ರೀ ಬಸ್‌ ಬೇಡ, ವಿದ್ಯೆ ಬೇಕು! ಈ ವಿದ್ಯಾರ್ಥಿನಿ ಮಾತಿನ ವಿಡಿಯೊ ನೋಡಿ

Actor Darshan Arrested
ಪ್ರಮುಖ ಸುದ್ದಿ1 hour ago

Actor Darshan Arrested : ಪತಿ ಅರೆಸ್ಟ್​ ಆದರೂ ಪ್ರತಿಕ್ರಿಯೆ ನೀಡದ ದರ್ಶನ್​ ಪತ್ನಿ ವಿಜಯಲಕ್ಷ್ಮಿ!

Mens Stripe Shirt Fashion
ಫ್ಯಾಷನ್1 hour ago

Mens Stripe Shirt Fashion: ಮೆನ್ಸ್ ಕ್ಯಾಶುವಲ್‌ ಲುಕ್‌ಗೆ ರೀ ಎಂಟ್ರಿ ನೀಡಿದ ಸ್ಟ್ರೈಪ್ಡ್ ಶರ್ಟ್ಸ್

MS Dhoni
ಕ್ರೀಡೆ1 hour ago

MS Dhoni Fan: ಪ್ಯಾರಿಸ್​ನಲ್ಲಿ ಧೋನಿ ಕಾಲಿಗೆ ಬಿದ್ದು ಆಶೀರ್ವಾದ ಪಡೆದ ಅಭಿಮಾನಿ

Sharmitha Gowda in bikini
ಕಿರುತೆರೆ8 months ago

Geetha Serial Kannada: ನಿದ್ದೆ ಕದ್ದ ಚೋರಿ! ನಟಿ `ಭಾನುಮತಿ’ ಹಾಟ್‌ ಪೋಟೊಗಳಿಗೆ ಫ್ಯಾನ್ಸ್ ಫುಲ್ ಫಿದಾ

Kannada Serials
ಕಿರುತೆರೆ8 months ago

Kannada Serials TRP: 2ನೇ ಸ್ಥಾನದಲ್ಲಿ 2 ಧಾರಾವಾಹಿಗಳು; ಟಿಆರ್‌ಪಿ ರೇಸ್‌ನಲ್ಲಿಲ್ಲ ಭಾಗ್ಯಲಕ್ಷ್ಮೀ!

Bigg Boss- Saregamapa 20 average TRP
ಕಿರುತೆರೆ8 months ago

Kannada Serials TRP: ಏಳನೇ ಸ್ಥಾನಕ್ಕೆ ʻಅಮೃತಧಾರೆʼ ಕುಸಿತ; ಬಿಗ್‌ ಬಾಸ್‌-ಸರಿಗಮಪ ಟಿಆರ್‌ಪಿ ಎಷ್ಟು?

galipata neetu
ಕಿರುತೆರೆ6 months ago

Kanyadana Serial: ಕಿರುತೆರೆಗೆ ಮತ್ತೆ ಎಂಟ್ರಿ ಕೊಟ್ಟ ʻಗಾಳಿಪಟʼ ಖ್ಯಾತಿಯ ʻನೀತುʼ!

Kannada Serials
ಕಿರುತೆರೆ9 months ago

Kannada Serials TRP: ನಾಲ್ಕನೇ ಸ್ಥಾನಕ್ಕೆ ಕುಸಿತ ಕಂಡ ʻಸೀತಾ ರಾಮʼ; ಟಿಆರ್‌ಪಿ ರೇಸ್‌ಗೆ ʻಭಾಗ್ಯಲಕ್ಷ್ಮಿʼ ಬ್ಯಾಕ್‌!

Kannada Serials
ಕಿರುತೆರೆ8 months ago

Kannada Serials TRP: ಟಿಆರ್‌ಪಿಯಲ್ಲಿ ʻಭಾಗ್ಯಲಕ್ಷ್ಮೀʼ ಹವಾ; ʻಪುಟ್ಟಕ್ಕನ ಮಕ್ಕಳುʼ ಧಾರಾವಾಹಿಗೆ ಸಂಕಷ್ಟ!

Bigg Boss' dominates TRP; Sita Rama fell to the sixth position
ಕಿರುತೆರೆ8 months ago

Kannada Serials TRP: ಟಿಆರ್‌ಪಿಯಲ್ಲಿ ʻಬಿಗ್ ಬಾಸ್ʼದೇ ಮೇಲುಗೈ; 6ನೇ ಸ್ಥಾನಕ್ಕೆ ಕುಸಿದ ʻಸೀತಾ ರಾಮʼ

geetha serial Dhanush gowda engagement
ಕಿರುತೆರೆ6 months ago

Dhanush Gowda: ಗೀತಾ ಧಾರಾವಾಹಿ ನಟನ ನಿಶ್ಚಿತಾರ್ಥ; ಭವ್ಯಾಳ ಕಮೆಂಟ್‌ ಬಾಕ್ಸ್‌ ಆಫ್‌!

varun
ಕಿರುತೆರೆ7 months ago

Brindavana Serial: ʼಬೃಂದಾವನʼ ಧಾರಾವಾಹಿಯಲ್ಲಿ ದೊಡ್ಡ ಟ್ವಿಸ್ಟ್‌; ಪ್ರಮುಖ ಪಾತ್ರಧಾರಿಯೇ ಬದಲು

Kannada Serials
ಕಿರುತೆರೆ9 months ago

Kannada Serials TRP: ಟಿಆರ್‌ಪಿಯಲ್ಲಿ ಏರಿಕೆ ಕಂಡ ʻಅಮೃತಧಾರೆʼ; ʻಗಟ್ಟಿಮೇಳʼಕ್ಕೆ ನಾಲ್ಕನೇ ಸ್ಥಾನ!

karnataka weather Forecast
ಮಳೆ58 mins ago

Karnataka Weather : ಭಾರಿ ಮಳೆಗೆ ಗುಡ್ಡದಿಂದ ಉರುಳಿ ಬಿದ್ದ ಬಂಡೆಗಲ್ಲು; ಬೆಂಗಳೂರಲ್ಲೂ ಸಂಜೆ ವರ್ಷಧಾರೆ

actor Darshan
ಚಿತ್ರದುರ್ಗ2 hours ago

Actor Darshan: ರೇಣುಕಾ ಸ್ವಾಮಿ ಕೊಲೆ ಕೇಸ್‌ನಲ್ಲಿ ದರ್ಶನ್‌ ಅರೆಸ್ಟ್‌; ಪ್ರಕರಣವನ್ನು ಸಿಬಿಐಗೆ ವಹಿಸಲು ಒತ್ತಾಯ

Actor Darshan gets a series of questions from the police
ಸಿನಿಮಾ3 hours ago

Actor Darshan : ಪವಿತ್ರಗೌಡ ಬಗ್ಗೆ ಪೋಸ್ಟ್‌ ಮಾಡಿದ್ರೆ ನಿಮಗ್ಯಾಕೆ ಕೋಪ? ದರ್ಶನ್‌ಗೆ ಪೊಲೀಸರ ಪ್ರಶ್ನೆಗಳ ಸುರಿಮಳೆ

Actor Darshan
ಸಿನಿಮಾ5 hours ago

Actor Darshan : ದರ್ಶನ್‌ ಜೈಲಿಗೆ ಹೋಗುತ್ತಿರುವುದು ಇದೇ ಮೊದಲಲ್ಲ; ನಟನ ಮೇಲಿವೆ ಹತ್ತಾರು ಕೇಸ್‌ಗಳು!

Saptami Gowda
ಸಿನಿಮಾ7 hours ago

Saptami Gowda : ಯುವ ಪತ್ನಿ ಶ್ರೀದೇವಿ ವಿರುದ್ಧ ಮಾನಹಾನಿ ಕೇಸ್; ಕಾನೂನು ಹೋರಾಟಕ್ಕೆ ಮುಂದಾದ ನಟಿ ಸಪ್ತಮಿ ಗೌಡ!

Karnataka weather Forecast
ಮಳೆ1 day ago

Karnataka Weather : ಭಾರಿ ಮಳೆಗೆ ಮನೆ ಗೋಡೆ ಕುಸಿದು ಎಮ್ಮೆಗಳು ಸಾವು; ಆಕಳಿನ ಜೀವ ತೆಗೆದ ವಿದ್ಯುತ್‌ ತಂತಿ

Karnataka weather Forecast
ಮಳೆ4 days ago

Karnataka weather : ಮಳೆಯಲ್ಲೆ ತಪಸ್ಸಿಗೆ ಕುಳಿತ ವೃದ್ಧ; ಇನ್ನೊಂದು ವಾರ ನಾನ್‌ ಸ್ಟಾಪ್‌ ವರುಣನ ಅಬ್ಬರ

Sigandur launch
ಶಿವಮೊಗ್ಗ4 days ago

Sigandur launch: ಸಿಗಂದೂರು ಲಾಂಚ್‌ನಲ್ಲಿ ಭಾರಿ ವಾಹನಗಳಿಗೆ ನಿರ್ಬಂಧ

Karnataka Rain
ಮಳೆ5 days ago

Karnataka Rain : ಭಾರಿ ಮಳೆಗೆ ಮರ ಬಿದ್ದು ಮೇಕೆಗಳು ಸಾವು; ಸಿಡಿಲಿಗೆ ಎಲೆಕ್ಟ್ರಿಕ್‌ ಅಂಗಡಿ ಸುಟ್ಟು ಭಸ್ಮ

Lok Sabha Election Result 2024 Live
ದೇಶ1 week ago

Lok Sabha Election Result 2024 Live: ಲೋಕಸಭೆ ಚುನಾವಣೆ ಫಲಿತಾಂಶದ ಲೈವ್‌ ಇಲ್ಲಿ ವೀಕ್ಷಿಸಿ

ಟ್ರೆಂಡಿಂಗ್‌