Vastu Tips drinking water Vastu tips to bring health and wealth Vastu Tips : ಮನೆಯಲ್ಲಿ ಕುಡಿಯುವ ನೀರಿನ ಫಿಲ್ಟರನ್ನು ಈ ದಿಕ್ಕಿನಲ್ಲಿಟ್ಟರೆ ಬಹಳ ಒಳ್ಳೆಯದು! - Vistara News

ಭವಿಷ್ಯ

Vastu Tips : ಮನೆಯಲ್ಲಿ ಕುಡಿಯುವ ನೀರಿನ ಫಿಲ್ಟರನ್ನು ಈ ದಿಕ್ಕಿನಲ್ಲಿಟ್ಟರೆ ಬಹಳ ಒಳ್ಳೆಯದು!

ಮನೆಯಲ್ಲಿ ಸುಖ, ನೆಮ್ಮದಿ ಇರಬೇಕೆಂದರೆ ಏನೇನು ಮಾಡಬೇಕೆಂದು ವಾಸ್ತು ಶಾಸ್ತ್ರದಲ್ಲಿ ಹೇಳಲಾಗಿದೆ. ಮನೆಯಲ್ಲಿ ಕುಡಿಯುವ ನೀರನ್ನು ಎಲ್ಲಿ ಹೇಗೆ ಇರಿಸಬೇಕೆಂಬ ಕುರಿತೂ ವಾಸ್ತು ನಿಯಮಗಳಿವೆ (Vastu Tips). ಈ ಕುರಿತ ಮಾಹಿತಿ ಇಲ್ಲಿದೆ.

VISTARANEWS.COM


on

drinking water Vastu
ಮಹತ್ವದ, ಕುತೂಹಲಕರ ಸುದ್ದಿಗಾಗಿ ಫಾಲೊ ಮಾಡಿ
Koo

ಮನೆಯಲ್ಲಿ ಸುಖ, ನೆಮ್ಮದಿ, ಸಮೃದ್ಧಿ ನೆಲೆಸಿರಬೇಕೆಂದರೆ ವಾಸ್ತು ಪ್ರಕಾರ (Vastu shastra) ಮನೆಯನ್ನು ನಿರ್ಮಿಸಿರಬೇಕೆಂದು ವಾಸ್ತು ಶಾಸ್ತ್ರ ಹೇಳುತ್ತದೆ. ವಾಸ್ತು ಶಾಸ್ತ್ರದಲ್ಲಿ ಮನೆಯೊಳಗಿನ ಪ್ರತಿಯೊಂದು ವಿಷಯಕ್ಕೂ ಸಂಬಂಧಿಸಿದಂತೆ ನಿಯಮಗಳಿವೆ. ಮನೆಯ ಮುಂಬಾಗಿಲಿನಿಂದ ಹಿಡಿದು, ಮನೆಯ ಕಸ ಗುಡಿಸುವ ಪೊರಕೆಯವರೆಗೆ ಯಾವುದನ್ನು ಎಲ್ಲಿಡಬೇಕು, ಹೇಗೆ ಬಳಸಬೇಕೆಂಬ ಕುರಿತು ಈ ನಿಯಮಗಳಲ್ಲಿ ಹೇಳಲಾಗಿದೆ. ಹೀಗೆಯೇ ಕುಡಿಯುವ ನೀರನ್ನು ಎಲ್ಲಿಡಬೇಕು ಎಂಬುದರ ಕುರಿತೂ ವಾಸ್ತು ಶಾಸ್ತ್ರದಲ್ಲಿ (Vastu Tips) ಹೇಳಲಾಗಿದೆ.

ವಾಸ್ತು ಶಾಸ್ತ್ರದಲ್ಲಿ ಹೇಳಿರುವಂತೆ ನೀರನ್ನು ಇರಿಸುವುದು ಬಹಳ ಮುಖ್ಯ. ಅಡುಗೆಮನೆಯಲ್ಲಿ ಅದನ್ನು ಇರಿಸುವ ಸ್ಥಾನವು ಆರೋಗ್ಯ ಮತ್ತು ಸಂಪತ್ತಿನ ಮೇಲೆ ಪರಿಣಾಮ ಬೀರುತ್ತದೆ. ಸರಿಯಾದ ದಿಕ್ಕಿನಲ್ಲಿ ನೀರನ್ನಿಟ್ಟರೆ ಅಥವಾ ನೀರಿನ ಫಿಲ್ಟರ್‌ ಅನ್ನು ಕೂರಿಸಿದರೆ, ಅದು ನಿಮ್ಮ ಮತ್ತು ನಿಮ್ಮ ಕುಟುಂಬದ ಸದಸ್ಯರೆಲ್ಲರ ಆರೋಗ್ಯದ ಮೇಲೆ ಒಳ್ಳೆಯ ಪರಿಣಾಮಗಳನ್ನು ಬೀರುತ್ತದೆ. ವಾಸ್ತು ಪ್ರಕಾರ ಕುಡಿಯುವ ನೀರನ್ನು ಇರಿಸಲು ಕೆಲವು ಸಲಹೆಗಳು ಇಲ್ಲಿವೆ:

1. ಕುಡಿಯುವ ನೀರಿನ ಯಾವುದೇ ಮೂಲವನ್ನಾದರೂ ಅಂದರೆ ನಲ್ಲಿ (ಟ್ಯಾಪ್‌), ಫಿಲ್ಟರ್‌ಗಳು, ಪ್ಯೂರಿಫೈಯರ್‌ಗಳು ಇತ್ಯಾದಿಗಳನ್ನು ಮನೆಯ ಈಶಾನ್ಯ ದಿಕ್ಕಿನಲ್ಲಿ ಇರಿಸಬೇಕು. ನೀರಿನ ಸಂಗ್ರಹವೂ ಈ ದಿಕ್ಕಿನಲ್ಲಿರಬೇಕು.

2. ಒಂದು ವೇಳೆ ನಿಮ್ಮ ಮನೆಯಲ್ಲಿ ಈಶಾನ್ಯ ದಿಕ್ಕಿನಲ್ಲಿ ಇವುಗಳನ್ನು ಇರಿಸಲು ಸಾಧ್ಯವಾಗದೇ ಇದ್ದಲ್ಲಿ ಪೂರ್ವ ಮೂಲೆಯಲ್ಲಿ ಅಥವಾ ಉತ್ತರ ದಿಕ್ಕಿನಲ್ಲಿ ಇಡಬಹುದು. ಆದರೆ ಯಾವುದೇ ಕಾರಣಕ್ಕೂ ಬೆಂಕಿಯ ಮೂಲೆಯಲ್ಲಿ ಇಡಬಾರದು.

3. ನೀರಿನ ನಲ್ಲಿಗಳನ್ನು ಯಾವುದೇ ಕಾರಣಕ್ಕೂ ಎರಡು ಗೋಡೆಗಳು ಸೇರುವ ಮೂಲೆಯಲ್ಲಿ ಇರಿಸಬಾರದು.

4.ಅಡುಗೆಮನೆಯಲ್ಲಿ ಕುಡಿಯುವ ನೀರಿನ ಟ್ಯಾಪ್ ಸೋರುತ್ತಿರಬಾರದು. ಇದು ಹಣದ ಹರಿವಿನ ಮೇಲೆ ಪರಿಣಾಮ ಬೀರುತ್ತದೆ. ಇದು ಕೇವಲ ಕುಡಿಯುವ ನೀರಿನ ಟ್ಯಾಪ್‌ಗೆ ಅನ್ವಯವಾಗುವುದಲ್ಲ, ಮನೆಯ ಯಾವುದೇ ಭಾಗದಲ್ಲಿ ನೀರು ಪೋಲಾಗುತ್ತಿರಬಾರದು. ನೀರಿನೊಂದಿಗೆ ಸಂಪತ್ತೂ ಪೋಲಾಗುತ್ತದೆ ಎಂದು ವಾಸ್ತು ಶಾಸ್ತ್ರ ಹೇಳುತ್ತದೆ.

5. ಬೆಂಕಿ ಮತ್ತು ನೀರು ಒಂದಕ್ಕೊಂದು ಹೊಂದಿಕೆಯಾಗದ ಕಾರಣ ಕುಡಿಯುವ ನೀರು ಇಡುವ ಸ್ಥಳ ಮತ್ತು ಅಡುಗೆ ಒಲೆ ಅಕ್ಕಪಕ್ಕ ಇರದಂತೆ ನೋಡಿಕೊಳ್ಳಿ.

ಮನೆ ಕಟ್ಟಲು ಸೈಟ್‌ ಯಾವ ರೀತಿ ಇರಬೇಕು? ಈ ವಿಡಿಯೋ ನೋಡಿ ತಿಳಿಯಿರಿ.

6. ನಿಮ್ಮ ಮನೆಯ ಯಾವುದೇ ಭಾಗದಲ್ಲಿ ನೀರಿನ ಬಾಟಲಿಯನ್ನು ಇಡಬಹುದು. ಆದರೆ ನೀವು ನೀರಿನ ಬಾಟಲಿಯನ್ನು ಇಡುವಾಗ ಆ ಕೋಣೆಯ ಈಶಾನ್ಯ ದಿಕ್ಕಿನಲ್ಲಿ ಇಟ್ಟರೆ ಬಹಳ ಒಳ್ಳೆಯದು.

7. ನೀವು ಯಾವುದೇ ಬಣ್ಣದ ನೀರಿನ ಬಾಟಲಿಯನ್ನಾದರೂ ಬಳಸಬಹುದು. ಆದರೆ ಬಾಟಲಿಯ ಬಣ್ಣ ಕೆಂಪು ಮಾತ್ರ ಆಗಿರಬಾರದು. ಏಕೆಂದರೆ ಕೆಂಪು ಬಣ್ಣ ಅಗ್ನಿಯನ್ನು ಪ್ರತಿನಿಧಿಸುವುದರಿಂದ ಕೆಂಪು ಬಣ್ಣದ ಬಾಟಲಿ ಬಳಸಬಾರದು ಎಂದು ವಾಸ್ತು ನಿಯಮ ಹೇಳುತ್ತದೆ.

8. ಪಾರದರ್ಶಕವಾಗಿರುವ ನೀರಿನ ಬಾಟಲಿಯನ್ನು, ಫಿಲ್ಟರ್‌ ಅನ್ನು ಬಳಸುವುದು ಒಳ್ಳೆಯದು. ಒಂದು ವೇಳೆ ಸಾಧ್ಯವಾಗದೇ ಇದ್ದಲ್ಲಿ ನೀಲಿ ಬಣ್ಣದ ಬಾಟಲಿಯನ್ನು ಬಳಸಬಹುದು. ನೀವು ತುಂಬಾ ಧಾರ್ಮಿಕ ವ್ಯಕ್ತಿಯಾಗಿದ್ದರೆ, ನೇರಳೆ ಬಣ್ಣದ ನೀರಿನ ಬಾಟಲಿಯನ್ನು ಬಳಸಬಹುದು.

ಜ್ಯೋತಿಷ ಮತ್ತು ಭವಿಷ್ಯಕ್ಕೆ ಸಂಬಂಧಿಸಿದ ಸುದ್ದಿಗಳನ್ನು ಓದಲು ಇಲ್ಲಿ (Click Here) ಕ್ಲಿಕ್‌ ಮಾಡಿ.

9. ಮಲಗುವ ಕೋಣೆಯಲ್ಲಿ ನೀರಿನ ಬಾಟಲಿಯನ್ನು ಇಟ್ಟು ಕೊಳ್ಳಲು ವಾಸ್ತು ಶಾಸ್ತ್ರದ ಪ್ರಕಾರ ಯಾವುದೇ ತೊಂದರೆ ಇಲ್ಲ. ಆದರೆ ನೀವು ಮಲಗುವಾಗ ತಲೆಯ ಹತ್ತಿರ ಬಾಟಲಿಯನ್ನು ಅಥವಾ ನೀರಿನ ತಂಬಿಗೆಯನ್ನು ( ನೀರಿನ ಜಗ್‌) ಇಟ್ಟುಕೊಳ್ಳಬಾರದು. ಈ ರೀತಿ ಇಟ್ಟುಕೊಂಡರೆ ನಿದ್ರೆಗೆ ಭಂಗ ಬರಬಹುದು.

10. ನೀರನ್ನು ಸಂಗ್ರಹಿಸಿಡಲು ಪ್ಲಾಸ್ಟಿಕ್‌ ಬಾಟಲಿಗಳಿಗಿಂತ, ಮಣ್ಣಿನ ಅಥವಾ ತಾಮ್ರದ ಪಾತ್ರೆಗಳು , ಬಾಟಲಿಗಳು, ಬಹಳ ಸೂಕ್ತ. ವಾಸ್ತು ಶಾಸ್ತ್ರ ಪ್ರಕಾರ, ಮನೆಯಲ್ಲಿ ನೀರು ತುಂಬಿದ ಮಡಕೆಯನ್ನು ಇಡುವುದರಿಂದ ಹಣಕಾಸಿನ ತೊಂದರೆಗಳು ದೂರವಾಗುತ್ತವೆ ಮತ್ತು ನಿಮಗೆ ಎಂದಿಗೂ ಸಂಪತ್ತಿಗೆ ಕೊರತೆ ಇರುವುದಿಲ್ಲ.

ಇದನ್ನೂ ಓದಿ : Vastu Tips For Dining Hall: ಮನೆಯ ಡೈನಿಂಗ್‌ ಹಾಲ್‌ನಲ್ಲಿ ಈ ಆಕಾರದ ಟೇಬಲ್‌ ಇರಲೇಬಾರದು!

ಕ್ಷಣ ಕ್ಷಣದ ಮಾಹಿತಿಗಾಗಿ Vistara News FaceBook ಪೇಜ್ ಫಾಲೋ ಮಾಡಿ
ಮಹತ್ವದ ಮಾಹಿತಿಗಾಗಿ ವಿಸ್ತಾರ ನ್ಯೂಸ್ ಆ್ಯಪ್ ಉಚಿತವಾಗಿ ಡೌನ್ ಲೋಡ್ ಮಾಡಿಕೊಳ್ಳಿ: Andriod App | IOS App
Continue Reading
Click to comment

Leave a Reply

Your email address will not be published. Required fields are marked *

ಭವಿಷ್ಯ

Dina Bhavishya : ಗೌಪ್ಯ ವಿಷಯಗಳನ್ನು ಹಂಚಿಕೊಳ್ಳುವ ಮುನ್ನ ಇರಲಿ ಎಚ್ಚರಿಕೆ

Dina Bhavishya: ಶ್ರೀ ಶಕೇ 1946, ಕ್ರೋಧಿನಾಮ ಸಂವತ್ಸರ, ಉತ್ತರಾಯಣ, ಗ್ರೀಷ್ಮ ಋತು, ಜೇಷ್ಠ ಮಾಸ, ಶುಕ್ಲ ಪಕ್ಷದ ತದಿಗೆ ದಿನವಾದ ಇಂದು ದ್ವಾದಶ ರಾಶಿಗಳ ಭವಿಷ್ಯ ಹೇಗಿದೆ ಎಂಬ ಮಾಹಿತಿಯನ್ನು ಇಲ್ಲಿ ನೀಡಲಾಗಿದೆ.

VISTARANEWS.COM


on

By

Dina Bhavishya
Koo

ಚಂದ್ರನು ಕಟಕ ರಾಶಿಯಿಂದ ಭಾನುವಾರ ಮಧ್ಯಾಹ್ನ 03:28 ಕ್ಕೆ ಸಿಂಹ ರಾಶಿಯನ್ನು ಪ್ರವೇಶಿಸುತ್ತಾನೆ. ಇದರಿಂದಾಗಿ ವೃಷಭ, ಕಟಕ, ಕನ್ಯಾ, ತುಲಾ, ಮಕರ, ಕುಂಭ ರಾಶಿಯವರಿಗೆ ಚಂದ್ರನ ಬಲ ದೊರೆಯಲಿದೆ. ಇಂದಿನ ದಿನ ಭವಿಷ್ಯವನ್ನು (Dina Bhavishya) ನೋಡುವುದಾದರೆ, ಮೇಷ ರಾಶಿರಯವರು ಗೌಪ್ಯ ವಿಷಯಗಳನ್ನು ಹಂಚಿಕೊಳ್ಳುವ ಮುನ್ನ ಎಚ್ಚರಿಕೆ ಇರಲಿ. ಮನೆಯಲ್ಲಿ ಭಿನ್ನಾಭಿಪ್ರಾಯ ಮೂಡದಂತೆ ಎಚ್ಚರಿಕೆ ಇರಲಿ. ವೃಷಭ ರಾಶಿಯವರು ಆತ್ಮವಿಶ್ವಾಸದಿಂದ ಮಾಡಿದ ಕಾರ್ಯದಲ್ಲಿ ಯಶಸ್ಸು ಕೀರ್ತಿ ಸಿಗುವುದು. ಹಿರಿಯರ ಬೆಂಬಲ ಆಶೀರ್ವಾದ ಸಿಗಲಿದೆ. ಹಣಕಾಸು ವ್ಯವಹಾರಗಳಲ್ಲಿ ಪ್ರಗತಿ ಇರಲಿದೆ. ಹಳೆಯ ಸ್ನೇಹಿತರೊಂದಿಗೆ ಸಮಯ ಹಂಚಿಕೊಳ್ಳುವ ಸಾಧ್ಯತೆ ಇದೆ. ಇದೂ ಸೇರಿದಂತೆ ದ್ವಾದಶ ರಾಶಿಗಳ ಇಂದಿನ ಭವಿಷ್ಯ ಹೇಗಿದೆ? ಪಂಚಾಂಗ ಏನು ಹೇಳುತ್ತದೆ ಎಂಬುದನ್ನು ತಿಳಿಯೋಣ.

ಇಂದಿನ ಪಂಚಾಂಗ (kannada panchanga) (9-06-2024)

ಶ್ರೀ ಶಕೇ 1946, ಕ್ರೋಧಿನಾಮ ಸಂವತ್ಸರ, ಉತ್ತರಾಯಣ, ಗ್ರೀಷ್ಮ ಋತು, ಜೇಷ್ಠ ಮಾಸ, ಶುಕ್ಲ ಪಕ್ಷ.
ತಿಥಿ: ತದಿಗೆ 15:43 ವಾರ: ಭಾನುವಾರ
ನಕ್ಷತ್ರ: ಪುನರ್ವಸು 20:19 ಯೋಗ: ವೃದ್ಧಿ 17:19
ಕರಣ: ಗರಜ 15:43 ಅಮೃತ ಕಾಲ: ಸಂಜೆ 05:52 ರಿಂದ 07:31ರ ವರೆಗೆ
ದಿನದ ವಿಶೇಷ: ಕದಳೀ ಗೌರೀ ವ್ರತ

ಸೂರ್ಯೋದಯ : 05:53   ಸೂರ್ಯಾಸ್ತ : 06:45

ರಾಹುಕಾಲ : ಸಂಜೆ 4.30 ರಿಂದ 6.00
ಗುಳಿಕಕಾಲ: ಮಧ್ಯಾಹ್ನ 3.00 ರಿಂದ 4.30
ಯಮಗಂಡಕಾಲ: ಮಧ್ಯಾಹ್ನ 12.00 ರಿಂದ 1.30

ದ್ವಾದಶ ರಾಶಿ ಭವಿಷ್ಯ (Dina Bhavishya in Kannada)

Horoscope Today

ಮೇಷ: ಧಾರ್ಮಿಕ ಕಾರ್ಯಗಳಲ್ಲಿ ಭಾಗವಹಿಸುವ ಸಾಧ್ಯತೆ ಇದೆ. ಗೃಹೋಪಯೋಗಿ ವಸ್ತುಗಳಿಂದಾಗಿ ಖರ್ಚು ಹೆಚ್ಚಲಿದೆ. ಗೌಪ್ಯ ವಿಷಯಗಳನ್ನು ಹಂಚಿಕೊಳ್ಳುವ ಮುನ್ನ ಎಚ್ಚರಿಕೆ ಇರಲಿ. ಮನೆಯಲ್ಲಿ ಭಿನ್ನಾಭಿಪ್ರಾಯ ಮೂಡದಂತೆ ಎಚ್ಚರಿಕೆ ಇರಲಿ. ಉದ್ಯೋಗಿಗಳಿಗೆ ಕಿರಿಕಿರಿಯಾಗಲಿದೆ. ಆರೋಗ್ಯ ಮಧ್ಯಮವಾಗಿರಲಿದೆ. ಮಾನಸಿಕ ಒತ್ತಡ ಹೆಚ್ಚಾಗಲಿದೆ. ಕೌಟುಂಬಿಕವಾಗಿ ಸಾಧಾರಣ ಫಲ. ಅದೃಷ್ಟ ಸಂಖ್ಯೆ: 1

Horoscope Today

ವೃಷಭ: ಆತ್ಮವಿಶ್ವಾಸದಿಂದ ಮಾಡಿದ ಕಾರ್ಯದಲ್ಲಿ ಯಶಸ್ಸು ಕೀರ್ತಿ ಸಿಗುವುದು. ಹಿರಿಯರ ಬೆಂಬಲ ಆಶೀರ್ವಾದ ಸಿಗಲಿದೆ. ಹಣಕಾಸು ವ್ಯವಹಾರಗಳಲ್ಲಿ ಪ್ರಗತಿ ಇರಲಿದೆ. ಹಳೆಯ ಸ್ನೇಹಿತರೊಂದಿಗೆ ಸಮಯ ಹಂಚಿಕೊಳ್ಳುವ ಸಾಧ್ಯತೆ ಇದೆ. ಆರೋಗ್ಯ ಪರಿಪೂರ್ಣವಾಗಿರಲಿದೆ. ಉದ್ಯೋಗಿಗಳಿಗೆ ಕೊಂಚ ಕಿರಿಕಿರಿಯಾಗಲಿದೆ. ಕೌಟುಂಬಿಕವಾಗಿ ಶುಭಫಲ.
ಅದೃಷ್ಟ ಸಂಖ್ಯೆ: 9

Horoscope Today

ಮಿಥುನ:ಆರೋಗ್ಯದ ಕುರಿತು ಕಾಳಜಿ ಇರಲಿ. ಆದಷ್ಟು ತಾಳ್ಮೆಯಿಂದ ವರ್ತಿಸಿ. ಭವಿಷ್ಯದಲ್ಲಿನ ಹೂಡಿಕೆ ಯೋಜನೆ ಕುರಿತು ಆಲೋಚನೆ ಮಾಡುವಿರಿ. ಕುಟುಂಬದಲ್ಲಿ ಸಂಗಾತಿಯ ಬೆಂಬಲ ಹಾಗೂ ಸಲಹೆ ಸಿಗಲಿದೆ. ದಿನದ ಮಟ್ಟಿಗೆ ಖರ್ಚು ಇರಲಿದೆ. ಉದ್ಯೋಗಿಗಳಿಗೆ ಭರವಸೆ ಮೂಡಲಿದೆ. ಕೌಟುಂಬಿಕವಾಗಿ ಶುಭ ಫಲ. ಅದೃಷ್ಟ ಸಂಖ್ಯೆ: 7

Horoscope Today

ಕಟಕ:ಅತಿಯಾದ ಒತ್ತಡದಿಂದಾಗಿ ಆರೋಗ್ಯದ ಮೇಲೆ ಪರಿಣಾಮ ಬೀರುವ ಸಾಧ್ಯತೆ ಹೆಚ್ಚಿದೆ, ಕಾಳಜಿ ವಹಿಸುವುದು ಸೂಕ್ತ. ಹೂಡಿಕೆ ವ್ಯವಹಾರದ ಕುರಿತು ಎಚ್ಚರಿಕೆ ಇರಲಿ. ಆರ್ಥಿಕವಾಗಿ ಲಾಭ ಇರಲಿದೆ. ಉದ್ಯೋಗಿಗಳಿಗೆ ಒತ್ತಡ ಹೆಚ್ಚಾಗಲಿದೆ. ಕುಟುಂಬದ ವಾತಾವರಣ ಕೆಡದಂತೆ ಜಾಗ್ರತೆವಹಿಸಿ. ಕೌಟುಂಬಿಕವಾಗಿ ಸಾಧಾರಣ ಫಲ. ಅದೃಷ್ಟ ಸಂಖ್ಯೆ: 2

Horoscope Today

ಸಿಂಹ: ನಿಮ್ಮ ಆಕರ್ಷಕ ವರ್ತನೆ ಗಮನ ಸೆಳೆಯುತ್ತದೆ. ಕೆಲಸ ಕಾರ್ಯಗಳಲ್ಲಿ ಯಶಸ್ಸು ಸಿಗಲಿದೆ. ಕುಟುಂಬದಲ್ಲಿ ಭಿನ್ನಾಭಿಪ್ರಾಯ ಮೂಡುವ ಸಾಧ್ಯತೆ ಇದೆ, ಸಾಧ್ಯವಾದಷ್ಟು ಮಟ್ಟಿಗೆ ತಾಳ್ಮೆ ಇರಲಿ. ಉನ್ನತ ವ್ಯಕ್ತಿಗಳ ಸಹಾಯ ದೊರೆಯಲಿದೆ. ಉದ್ಯೋಗಿಗಳಿಗೆ ಯಶಸ್ಸು,ಕೀರ್ತಿ, ಶುಭಫಲ. ಕೌಟುಂಬಿಕವಾಗಿ ಮಿಶ್ರಫಲ. ಅದೃಷ್ಟ ಸಂಖ್ಯೆ: 9

Horoscope Today

ಕನ್ಯಾ: ಹಳೆಯ ವಿಚಾರಗಳನ್ನು ಕೆದಕಿ ಮಾನಸಿಕ ಒತ್ತಡವನ್ನು ಹೆಚ್ಚು ಮಾಡಿಕೊಳ್ಳುವುದು ಬೇಡ. ಮುಂದೆಯಾಗುವ ಕಾರ್ಯಗಳ ಬಗ್ಗೆ ಗಮನ ಇರಲಿ. ಆರೋಗ್ಯದ ಕುರಿತು ಕಾಳಜಿ ಇರಲಿ. ಹಣಕಾಸು ವ್ಯವಹಾರಗಳಲ್ಲಿ ಪ್ರಗತಿ ಇರಲಿದೆ. ಉದ್ಯೋಗಿಗಳಿಗೆ ಶುಭಫಲ. ಕೌಟುಂಬಿಕವಾಗಿ ಸಾಧಾರಣ ಫಲ. ಅದೃಷ್ಟ ಸಂಖ್ಯೆ: 7

ಭವಿಷ್ಯ ಮತ್ತು ಜ್ಯೋತಿಷ್ಯಕ್ಕೆ ಸಂಬಂಧಿಸಿದ ಲೇಖನ/ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್‌ (Click Here) ಮಾಡಿ

Horoscope Today

ತುಲಾ:ಹಣಕಾಸಿನ ಸಮಸ್ಯೆ ತಲೆದೋರಲಿದೆ. ಹಿರಿಯರ ಮಾರ್ಗದರ್ಶನ ಸಿಗಲಿದೆ. ಕುಟುಂಬದ ಆಪ್ತರಿಂದ ಸಮಾಧಾನದ ಮಾತುಗಳನ್ನು ಕೇಳುವಿರಿ. ಹೂಡಿಕೆ ವ್ಯವಹಾರಗಳನ್ನು ಮಾಡುವುದು ಬೇಡ. ಉದ್ಯೋಗಿಗಳಿಗೆ ಒತ್ತಡ ಹೆಚ್ಚಲಿದೆ. ಕೌಟುಂಬಿಕವಾಗಿ ಮಿಶ್ರಫಲ. ಅದೃಷ್ಟ ಸಂಖ್ಯೆ: 1

Horoscope Today

ವೃಶ್ಚಿಕ : ಹಣಕಾಸು ವ್ಯವಹಾರಗಳಲ್ಲಿ ಪ್ರಗತಿ ಇರಲಿದೆ. ಆರೋಗ್ಯ ಪರಿಪೂರ್ಣವಾಗಿರಲಿದೆ. ದೀರ್ಘಕಾಲದ ಕೆಲಸಕಾರ್ಯಗಳಲ್ಲಿ ಯಶಸ್ಸು ಸಿಗಲಿದೆ. ಕುಟುಂಬದವರ ಸಹಕಾರ ಸಿಗಲಿದೆ. ವ್ಯಾಪಾರ ವ್ಯವಹಾರಗಳಲ್ಲಿ ಪ್ರಗತಿ ಇರಲಿದೆ. ಉದ್ಯೋಗಿಗಳಿಗೆ ಕೊಂಚಮಟ್ಟಿಗೆ ಒತ್ತಡ. ಕೌಟುಂಬಿಕವಾಗಿ ಶುಭ ಫಲ. ಅದೃಷ್ಟ ಸಂಖ್ಯೆ: 3

Horoscope Today

ಧನಸ್ಸು: ಭವಿಷ್ಯದ ಕುರಿತಾಗಿ ಆಲೋಚನೆ ಮಾಡುವಿರಿ, ಜೀವನದಲ್ಲಿ ಅಭದ್ರತೆಯು ಕಾಡಬಹುದು.ಯಾವುದನ್ನು ಅತಿಯಾಗಿ ಆಲೋಚಿಸಿ ಮಾನಸಿಕ ನೆಮ್ಮದಿ ಹಾಳು ಮಾಡಿಕೊಳ್ಳುವುದು ಬೇಡ. ಆರೋಗ್ಯದ ಕುರಿತು ಕಾಳಜಿ ಇರಲಿ.ಹೂಡಿಕೆ, ಹಣಕಾಸು ವ್ಯವಹಾರಗಳಲ್ಲಿ ಪ್ರಗತಿ ಇರಲಿದೆ. ಉದ್ಯೋಗಿಗಳಿಗೆ ಶುಭಫಲ. ಕೌಟುಂಬಿಕವಾಗಿ ಶುಭಫಲ.
ಅದೃಷ್ಟ ಸಂಖ್ಯೆ: 9

Horoscope Today

ಮಕರ: ಆರ್ಥಿಕ ಪ್ರಗತಿ ಉತ್ತಮವಾಗಿರಲಿದೆ. ಆರೋಗ್ಯದಲ್ಲಿ ಕೊಂಚ ಏರುಪೇರಾಗಲಿದೆ. ಕೆಲವು ನಿರ್ಧಾರಗಳನ್ನು ಕೈಗೊಳ್ಳುವ ಸಾಧ್ಯತೆ ಇದೆ. ಈ ಹಿಂದೆ ನೀಡಿದ ಹಣವು ಮರಳುವ ಸಾಧ್ಯತೆ ಇದೆ. ಯಾವುದಾದರೂ ಪ್ರಸಂಗಗಳಿಂದ ನಿಮ್ಮ ಮೇಲೆ ಅಪವಾದ ಬರುವ ಸಾಧ್ಯತೆ ಇದೆ, ಎಚ್ಚರಿಕೆ ಇರಲಿ. ಉದ್ಯೋಗಿಗಳಿಗೆ ಶುಭ ಫಲ. ಕೌಟುಂಬಿಕವಾಗಿ ಸಾಧಾರಣ ಫಲ.
ಅದೃಷ್ಟ ಸಂಖ್ಯೆ: 9

Horoscope Today

ಕುಂಭ: ಉತ್ಸಾಹದಿಂದ ಕಾರ್ಯ ಸಿದ್ಧಿ. ಅಗತ್ಯ ವಸ್ತುಗಳ ಖರೀದಿ ಖರ್ಚು ಇರಲಿದೆ. ಅಮೂಲ್ಯ ವಸ್ತುಗಳ ಕುರಿತು ಲಕ್ಷ್ಯ ಇರಲಿ. ಕುಟುಂಬದಲ್ಲಿ ಭಿನ್ನಾಭಿಪ್ರಾಯಗಳು ಮೂಡಬಹುದು. ಆರೋಗ್ಯ ಪರಿಪೂರ್ಣವಾಗಿರಲಿದೆ. ಉದ್ಯೋಗಿಗಳಿಗೆ ಒತ್ತಡ ಇರಲಿದೆ. ಕೌಟುಂಬಿಕವಾಗಿ ಮಿಶ್ರಫಲ. ಅದೃಷ್ಟ ಸಂಖ್ಯೆ: 6

Horoscope Today

ಮೀನ: ಅನೇಕ ಮೂಲಗಳಿಂದ ಹಣಕಾಸಿನ ಹರಿವು ಹೆಚ್ಚಳವಾಗಲಿದೆ. ದೀರ್ಘಕಾಲದ ಆಲೋಚನೆಯಿಂದ ದೂರವಾಗುವ ಸಾಧ್ಯತೆ ಇದೆ. ಮಾನಸಿಕ ನೆಮ್ಮದಿ ಇರಲಿದೆ. ಆರೋಗ್ಯ ಪರಿಪೂರ್ಣವಾಗಿರಲಿದೆ. ಉದ್ಯೋಗಿಗಳಿಗೆ ಭರವಸೆಯ ಹೊಸ ಅವಕಾಶಗಳು ಒದಗಿಬರುವುದು. ಕೌಟುಂಬಿಕವಾಗಿ ಶುಭಫಲ.
ಅದೃಷ್ಟ ಸಂಖ್ಯೆ: 4

Horoscope Today

ವಿದ್ವಾನ್ ಶ್ರೀ ನವೀನಶಾಸ್ತ್ರಿ ರಾ. ಪುರಾಣಿಕ
ಖ್ಯಾತ ಜ್ಯೋತಿಷಿ ಹಾಗೂ ಉಪನ್ಯಾಸಕರು

M: 9481854580 | pnaveenshastri@gmail.com

Continue Reading

ಭವಿಷ್ಯ

Dina Bhavishya : ಹಣ ಗಳಿಸುವ ವಿವಿಧ ಮಾರ್ಗಗಳಿಗೆ ಈ ರಾಶಿಯವರಿಗೆ ಸಿಗಲಿದೆ ಪುಷ್ಟಿ

Dina Bhavishya: ಶ್ರೀ ಶಕೇ 1946, ಕ್ರೋಧಿನಾಮ ಸಂವತ್ಸರ, ಉತ್ತರಾಯಣ, ಗ್ರೀಷ್ಮ ಋತು, ಜೇಷ್ಠ ಮಾಸ, ಶುಕ್ಲ ಪಕ್ಷದ ದ್ವಿತೀಯ ದಿನವಾದ ಇಂದು ದ್ವಾದಶ ರಾಶಿಗಳ ಭವಿಷ್ಯ ಹೇಗಿದೆ ಎಂಬ ಮಾಹಿತಿಯನ್ನು ಇಲ್ಲಿ ನೀಡಲಾಗಿದೆ.

VISTARANEWS.COM


on

By

Dina Bhavishya
Koo

ಚಂದ್ರನು ಶನಿವಾರ ಕಟಕ ರಾಶಿಯಲ್ಲೆ ನೆಲಸಲಿದ್ದಾನೆ. ಇದರಿಂದಾಗಿ ಮೇಷ, ಮಿಥುನ, ಸಿಂಹ, ಕನ್ಯಾ, ಧನಸ್ಸು, ಮಕರ ರಾಶಿಯವರಿಗೆ ಚಂದ್ರನ ಬಲ ದೊರೆಯಲಿದೆ. ಇಂದಿನ ದಿನ ಭವಿಷ್ಯವನ್ನು (Dina Bhavishya) ನೋಡುವುದಾದರೆ, ಮೇಷ ರಾಶಿಯವರು ಹಣ ಗಳಿಸುವ ವಿವಿಧ ಮಾರ್ಗಗಳು ಪುಷ್ಟಿ ನೀಡಲಿವೆ. ಅನಗತ್ಯವಾಗಿ ಇತರರ ಬಗ್ಗೆ ಮನೆಯಲ್ಲಿ ಚರ್ಚಿಸುವುದು ಬೇಡ, ಮನೆಯ ವಾತಾವರಣ ಕೆಡುವ ಸಾಧ್ಯತೆ ಇದೆ. ವೃಷಭ ರಾಶಿಯವರು ಗತಿಸಿದ ಘಟನೆಗಳ ಬಗ್ಗೆ ಚಿಂತಿಸಿ, ಮಾನಸಿಕ ನೆಮ್ಮದಿ ಹಾಳು ಮಾಡಿಕೊಳ್ಳುವುದು ಬೇಡ. ಸಾಧ್ಯವಾದಷ್ಟು ತಾಳ್ಮೆಯಿಂದ ಇರಿ. ಭೂಮಿ, ಆಸ್ತಿ ಖರೀದಿ ವ್ಯವಹಾರದಲ್ಲಿ ದಿನದ ಮಟ್ಟಿಗೆ ತೊಡಗುವುದು ಬೇಡ. ಇದೂ ಸೇರಿದಂತೆ ದ್ವಾದಶ ರಾಶಿಗಳ ಇಂದಿನ ಭವಿಷ್ಯ ಹೇಗಿದೆ? ಪಂಚಾಂಗ ಏನು ಹೇಳುತ್ತದೆ ಎಂಬುದನ್ನು ತಿಳಿಯೋಣ.

ಇಂದಿನ ಪಂಚಾಂಗ (kannada panchanga) (8-06-2024)

ಶ್ರೀ ಶಕೇ 1946, ಕ್ರೋಧಿನಾಮ ಸಂವತ್ಸರ, ಉತ್ತರಾಯಣ, ಗ್ರೀಷ್ಮ ಋತು, ಜೇಷ್ಠ ಮಾಸ, ಶುಕ್ಲ ಪಕ್ಷ.
ತಿಥಿ: ದ್ವಿತೀಯ 15:54 ವಾರ: ಶನಿವಾರ
ನಕ್ಷತ್ರ: ಆರಿದ್ರಾ 19:41 ಯೋಗ: ಗಂಡ 18:25
ಕರಣ: ಕೌಲವ 15:54 ಅಮೃತ ಕಾಲ: ಬೆಳಗ್ಗೆ 09:42 ರಿಂದ 11:18ರವರಗೆ
ದಿನದ ವಿಶೇಷ: ವಿಶ್ವ ಸಾಗರ ದಿನ

ಸೂರ್ಯೋದಯ : 05:53   ಸೂರ್ಯಾಸ್ತ : 06:45

ರಾಹುಕಾಲ : ಬೆಳಗ್ಗೆ9.00 ರಿಂದ 10.30
ಗುಳಿಕಕಾಲ: ಬೆಳಗ್ಗೆ 6.00 ರಿಂದ 7.30
ಯಮಗಂಡಕಾಲ: ಮಧ್ಯಾಹ್ನ 1.30 ರಿಂದ 3.00

ದ್ವಾದಶ ರಾಶಿ ಭವಿಷ್ಯ (Dina Bhavishya in Kannada)

Horoscope Today

ಮೇಷ: ಹಣ ಗಳಿಸುವ ವಿವಿಧ ಮಾರ್ಗಗಳು ಪುಷ್ಟಿ ನೀಡಲಿವೆ. ಅನಗತ್ಯವಾಗಿ ಇತರರ ಬಗ್ಗೆ ಮನೆಯಲ್ಲಿ ಚರ್ಚಿಸುವುದು ಬೇಡ, ಮನೆಯ ವಾತಾವರಣ ಕೆಡುವ ಸಾಧ್ಯತೆ ಇದೆ. ಉದ್ಯೋಗ ಹಾಗೂ ಆರೋಗ್ಯದಲ್ಲಿ ಸಾಧಾರಣ ಫಲ. ಕೌಟುಂಬಿಕವಾಗಿ ಮಿಶ್ರ ಫಲ. ಅದೃಷ್ಟ ಸಂಖ್ಯೆ: 9

Horoscope Today

ವೃಷಭ:ಗತಿಸಿದ ಘಟನೆಗಳ ಬಗ್ಗೆ ಚಿಂತಿಸಿ, ಮಾನಸಿಕ ನೆಮ್ಮದಿ ಹಾಳು ಮಾಡಿಕೊಳ್ಳುವುದು ಬೇಡ. ಸಾಧ್ಯವಾದಷ್ಟು ತಾಳ್ಮೆಯಿಂದ ಇರಿ. ಭೂಮಿ, ಆಸ್ತಿ ಖರೀದಿ ವ್ಯವಹಾರದಲ್ಲಿ ದಿನದ ಮಟ್ಟಿಗೆ ತೊಡಗುವುದು ಬೇಡ. ಖರ್ಚು ಹೆಚ್ಚಾಗಲಿದೆ. ಆರೋಗ್ಯ ಹಾಗೂ ಉದ್ಯೋಗದಲ್ಲಿ ಸಾಧಾರಣ ಫಲ. ಕೌಟುಂಬಿಕವಾಗಿ ಮಿಶ್ರ ಫಲ. ಅದೃಷ್ಟ ಸಂಖ್ಯೆ: 8

Horoscope Today

ಮಿಥುನ:ಅನಿವಾರ್ಯ ಕಾರಣಗಳಿಂದ ಖರ್ಚು ಹೆಚ್ಚಾಗಲಿದೆ. ಭವಿಷ್ಯದ ಹೂಡಿಕೆ ಕುರಿತು ಯೋಚಿಸುವ ಸಾಧ್ಯತೆ ಇದೆ. ಉದ್ಯೋಗಿಗಳಿಗೆ ದಿನದ ಮಟ್ಟಿಗೆ ಕಿರಿಕಿರಿಯಾಗಲಿದೆ. ಆರೋಗ್ಯ ಪರಿಪೂರ್ಣವಾಗಿರಲಿದೆ. ಕೌಟುಂಬಿಕವಾಗಿ ಶುಭಫಲ. ಅದೃಷ್ಟ ಸಂಖ್ಯೆ 2

Horoscope Today

ಕಟಕ:ಹೊಸ ವ್ಯವಹಾರದಲ್ಲಿ ತೊಡಗುವಿರಿ. ಆತುರದ ತೀರ್ಮಾನಗಳು ಬೇಡ. ಕುಟುಂಬದ ಸದಸ್ಯರೊಂದಿಗೆ ಚರ್ಚೆ ನಡೆಸುವಿರಿ. ಸಂಗಾತಿಯ ಬೆಂಬಲ ಸಿಗಲಿದೆ. ಕೌಟುಂಬಿಕವಾಗಿ ಶುಭ ಫಲ. ಅದೃಷ್ಟ ಸಂಖ್ಯೆ: 5

Horoscope Today

ಸಿಂಹ: ಅತಿಯಾದ ವ್ಯಾಮೋಹ ದುಃಖಕ್ಕೆ ಕಾರಣವಾಗಬಹುದು. ಇಂದು ನಿಮ್ಮ ಕೆಲಸದ ಸ್ಥಳದಲ್ಲಿ ಪ್ರೀತಿ ಮೇಲುಗೈ ಸಾಧಿಸುತ್ತದೆ. ನಿಮ್ಮ ಶಕ್ತಿ ಮತ್ತು ನಿಮ್ಮ ಮುಂದಿನ ಯೋಜನೆಗಳನ್ನು ಮರು ನಿರ್ಣಯಿಸುವ ಸಮಯವಿದು. ಆರೋಗ್ಯದಲ್ಲಿ ಪ್ರಗತಿ ಇರಲಿದೆ. ಕೌಟುಂಬಿಕವಾಗಿ ಶುಭ ಫಲ.
ಅದೃಷ್ಟ ಸಂಖ್ಯೆ: 4

Horoscope Today

ಕನ್ಯಾ: ಆರ್ಥಿಕವಾಗಿ ಬಳಲುವ ಸಾಧ್ಯತೆ ಇದೆ, ಕೆಲಸ ಕಾರ್ಯಗಳು ನಿಧಾನವಾಗಲಿದೆ. ತಾಳ್ಮೆಯಿಂದ ವರ್ತಿಸಿ. ನೆರೆಹೊರೆಯವರೊಂದಿಗೆ ವಿನಾಕಾರಣ ಜಗಳ ಬೇಡ. ಉದ್ಯೋಗಿಗಳಿಗೆ ಶುಭಫಲ. ಆರೋಗ್ಯ ಪರಿಪೂರ್ಣವಾಗಿರಲಿದೆ. ಕೌಟುಂಬಿಕವಾಗಿ ಸಾಧಾರಣ ಫಲ. ಅದೃಷ್ಟ ಸಂಖ್ಯೆ: 5

ಭವಿಷ್ಯ ಮತ್ತು ಜ್ಯೋತಿಷ್ಯಕ್ಕೆ ಸಂಬಂಧಿಸಿದ ಲೇಖನ/ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್‌ (Click Here) ಮಾಡಿ

Horoscope Today

ತುಲಾ: ಸಕಾರಾತ್ಮಕ ಆಲೋಚನೆಗಳಿಂದ ಕೆಲಸ ಕಾರ್ಯಗಳಲ್ಲಿ ಯಶಸ್ಸು ಸಿಗಲಿದೆ. ಅನಿವಾರ್ಯ ಕಾರಣಗಳಿಂದ ಖರ್ಚು ಹೆಚ್ಚಾಗಲಿದೆ. ಮನೆ ಸದಸ್ಯರ ವರ್ತನೆ ನಿಮ್ಮನ್ನು ಮಾನಸಿಕವಾಗಿ ತೊಂದರೆಗಳಾಗುವಂತೆ ಮಾಡುವ ಸಾಧ್ಯತೆ ಇದೆ. ಪ್ರಯಾಣ ಬೆಳೆಸುವ ಸಾಧ್ಯತೆ ಇದೆ. ಉದ್ಯೋಗಿಗಳಿಗೆ ಶುಭಫಲ. ಕೌಟುಂಬಿಕವಾಗಿ ಸಾಧಾರಣ ಫಲ. ಅದೃಷ್ಟ ಸಂಖ್ಯೆ: 3

Horoscope Today

ವೃಶ್ಚಿಕ : ದೈಹಿಕವಾಗಿ ಹಾಗೂ ಮಾನಸಿಕವಾಗಿ ಪರಿಣಾಮವನ್ನು ಬೀರಬಹುದು. ಆದಷ್ಟು ವಿಶ್ರಾಂತಿ ಪಡೆಯಿರಿ, ತಾಳ್ಮೆ ಇರಲಿ. ಆರ್ಥಿಕ ಪ್ರಗತಿ ಸಾಧಾರಣವಾಗಿರಲಿದೆ. ಉದ್ಯೋಗಿಗಳಿಗೆ ಶುಭಫಲ. ಕುಟುಂಬದ ಆಪ್ತರಿಂದ ಸಮಾಧಾನದ ಮಾತುಗಳನ್ನು ಕೇಳುವಿರಿ. ಕೌಟುಂಬಿಕವಾಗಿ ಶುಭಫಲ. ಅದೃಷ್ಟ ಸಂಖ್ಯೆ: 4

Horoscope Today

ಧನಸ್ಸು: ಪ್ರವಾಸದ ಕುರಿತು ಚರ್ಚೆ ಮಾಡುವಿರಿ. ಕುಟುಂಬದವರ ಸಹಕಾರ ಸಿಗಲಿದೆ. ಕೊಂಚ ಆರೋಗ್ಯದ ಕಡೆಗೆ ಗಮನ ಇರಲಿ. ಉದ್ಯೋಗಿಗಳಿಗೆ ಹೊಸ ಭರವಸೆ ಮೂಡಲಿದೆ. ಕೌಟುಂಬಿಕವಾಗಿ ಶುಭಫಲ. ಅದೃಷ್ಟ ಸಂಖ್ಯೆ: 7

Horoscope Today

ಮಕರ: ಧಾರ್ಮಿಕ ಕಾರ್ಯಕ್ರಮಗಳಲ್ಲಿ ಭಾಗಿಯಾಗುವ ಸಾಧ್ಯತೆ ಇದೆ. ಮಾತಿನ ಭರದಲ್ಲಿ ಅತಿರೇಕದ ಮಾತುಗಳು ಬೇಡ, ತಾಳ್ಮೆಯಿಂದ ವರ್ತಿಸಿ. ಆರೋಗ್ಯ ಪರಿಪೂರ್ಣವಾಗಿರಲಿದೆ. ಕೌಟುಂಬಿಕವಾಗಿ ಶುಭ ಫಲ. ಅದೃಷ್ಟ ಸಂಖ್ಯೆ: 8

Horoscope Today

ಕುಂಭ: ವಾಹನ ಚಾಲನೆ ಮಾಡುವಾಗ ಜಾಗರೂಕತೆಯಿಂದ ಚಾಲನೆ ಮಾಡಿ, ಅಪಘಾತವಾಗುವ ಸಾಧ್ಯತೆ ಇದೆ. ದಿಢೀರ್ ಪ್ರಯಾಣ ಬೆಳೆಸಬೇಕಾಗಬಹುದು. ಆರೋಗ್ಯದ ಕುರಿತು ಕಾಳಜಿ ಇರಲಿ. ಉದ್ಯೋಗಿಗಳಿಗೆ ಸಾಧಾರಣ ಫಲ. ಕೌಟುಂಬಿಕವಾಗಿ ಕನಿಷ್ಠ ಫಲ ಇರಲಿದೆ. ಅದೃಷ್ಟ ಸಂಖ್ಯೆ: 2

Horoscope Today

ಮೀನ: ಅನಿವಾರ್ಯ ಪ್ರಸಂಗಗಳು ನಿಮ್ಮನ್ನು ಒತ್ತಡಕ್ಕೆ ಒಳಗಾಗುವಂತೆ ಮಾಡಬಹುದು. ಆರೋಗ್ಯ ಪರಿಪೂರ್ಣವಾಗಿರಲಿದೆ. ಆರ್ಥಿಕವಾಗಿ ಪ್ರಗತಿ ಇರಲಿದೆ, ಹೊಸ ಸ್ನೇಹಿತರ ಪರಿಚಯವಾಗಲಿದೆ. ಉದ್ಯೋಗದ ಕುರಿತು ಆಲೋಚನೆ ಮಾಡುವಿರಿ. ಕೌಟುಂಬಿಕವಾಗಿ ಶುಭಫಲ. ಅದೃಷ್ಟ ಸಂಖ್ಯೆ: 4

Horoscope Today

ವಿದ್ವಾನ್ ಶ್ರೀ ನವೀನಶಾಸ್ತ್ರಿ ರಾ. ಪುರಾಣಿಕ
ಖ್ಯಾತ ಜ್ಯೋತಿಷಿ ಹಾಗೂ ಉಪನ್ಯಾಸಕರು

M: 9481854580 | pnaveenshastri@gmail.com

Continue Reading

ಭವಿಷ್ಯ

Dina Bhavishya :‌ ನಂಬಿಕೆ ಇಟ್ಟು ಕಾರ್ಯದಲ್ಲಿ ಮುನ್ನುಗ್ಗಿ ಯಶಸ್ಸು ಗ್ಯಾರಂಟಿ

Dina Bhavishya: ಶ್ರೀ ಶಕೇ 1946, ಕ್ರೋಧಿನಾಮ ಸಂವತ್ಸರ, ಉತ್ತರಾಯಣ, ಗ್ರೀಷ್ಮ ಋತು, ಜೇಷ್ಠ ಮಾಸ, ಶುಕ್ಲ ಪಕ್ಷದ ಪಾಡ್ಯ ದಿನವಾದ ಇಂದು ದ್ವಾದಶ ರಾಶಿಗಳ ಭವಿಷ್ಯ ಹೇಗಿದೆ ಎಂಬ ಮಾಹಿತಿಯನ್ನು ಇಲ್ಲಿ ನೀಡಲಾಗಿದೆ.

VISTARANEWS.COM


on

By

Dina Bhavishya
Koo

ಚಂದ್ರನು ಮಿಥುನ ರಾಶಿಯಿಂದ ಶುಕ್ರವಾರ ಬೆಳಗ್ಗೆ 08:41ಕ್ಕೆ ಕಟಕ ರಾಶಿಯನ್ನು ಪ್ರವೇಶಿಸುತ್ತಾನೆ. ಇದರಿಂದಾಗಿ ಮೇಷ, ಮಿಥುನ, ಸಿಂಹ, ಕನ್ಯಾ, ಧನಸ್ಸು, ಮಕರ ರಾಶಿಯವರಿಗೆ ಚಂದ್ರನ ಬಲ ದೊರೆಯಲಿದೆ. ಇಂದಿನ ದಿನ ಭವಿಷ್ಯವನ್ನು (Dina Bhavishya) ನೋಡುವುದಾದರೆ, ಮೇಷ ರಾಶಿಯವರು ಕುಟುಂಬದಲ್ಲಿ ಕಲಹಗಳಿಗೆ ಅವಕಾಶ ನೀಡದಂತೆ ಎಚ್ಚರಿಕೆ ಇರಲಿ. ವೃಷಭ ರಾಶಿಯವರು ಈ ಹಿಂದೆ ನಡೆದ ಘಟನೆ ನೆನಪಿಸಿ ಕೊರಗುವುದು ಬೇಡ. ಸಹದ್ಯೋಗಿಗಳಿಂದ ಅಸಹಕಾರ. ಕಟಕ ರಾಶಿಯವರು ಅತಿಯಾದ ಉತ್ಸಾಹದಲ್ಲಿ ಅತಿರೇಕದ ಮಾತುಗಳು ಬೇಡ, ಭಾವನೆಗಳನ್ನು ನಿಯಂತ್ರಿಸಿ. ಹಣಕಾಸು ಪ್ರಗತಿ ಸಾಧಾರಣವಾಗಿರಲಿದೆ. ಕುಟುಂಬ ಸದಸ್ಯರ ಬೆಂಬಲ ಸಿಗಲಿದೆ. ಇದೂ ಸೇರಿದಂತೆ ದ್ವಾದಶ ರಾಶಿಗಳ ಇಂದಿನ ಭವಿಷ್ಯ ಹೇಗಿದೆ? ಪಂಚಾಂಗ ಏನು ಹೇಳುತ್ತದೆ ಎಂಬುದನ್ನು ತಿಳಿಯೋಣ.

ಇಂದಿನ ಪಂಚಾಂಗ (kannada panchanga) (7-06-2024)

ಶ್ರೀ ಶಕೇ 1946, ಕ್ರೋಧಿನಾಮ ಸಂವತ್ಸರ, ಉತ್ತರಾಯಣ, ಗ್ರೀಷ್ಮ ಋತು, ಜೇಷ್ಠ ಮಾಸ, ಶುಕ್ಲ ಪಕ್ಷ.
ತಿಥಿ: ಪಾಡ್ಯ 16:44 ವಾರ: ಶುಕ್ರವಾರ
ನಕ್ಷತ್ರ: ಮೃಗಶಿರಾ 19:41 ಯೋಗ: ಶೂಲ 20:03
ಕರಣ: ಭವ 16:44 ಅಮೃತ ಕಾಲ: ಬೆಳಗ್ಗೆ 11:07 ರಿಂದ 12:41ರವರಗೆ
ದಿನದ ವಿಶೇಷ: ದಶಹರ ವ್ರತಾರಂಭ

ಸೂರ್ಯೋದಯ : 05:53   ಸೂರ್ಯಾಸ್ತ : 06:45

ರಾಹುಕಾಲ : ಬೆಳಗ್ಗೆ 10:42 ರಿಂದ 12:19
ಗುಳಿಕಕಾಲ: ಬೆಳಗ್ಗೆ 07:29 ರಿಂದ 09:06
ಯಮಗಂಡಕಾಲ: ಮಧ್ಯಾಹ್ನ 03:32 ರಿಂದ 05:08

ದ್ವಾದಶ ರಾಶಿ ಭವಿಷ್ಯ (Dina Bhavishya in Kannada)

Horoscope Today

ಮೇಷ:ಆರೋಗ್ಯ ಮಧ್ಯಮವಾಗಿರಲಿದೆ. ಹಣಕಾಸು ಬಾಕಿ ವ್ಯವಹಾರಗಳು ಪೂರ್ಣವಾಗಲಿದೆ. ಸಂಗಾತಿಯ ಆರೋಗ್ಯದ ಕಡೆಗೆ ಗಮನ ಇರಲಿ. ಆಮಂತ್ರಣ ಸಿಗುವ ಸಾಧ್ಯತೆ ಇದೆ. ಕುಟುಂಬದಲ್ಲಿ ಕಲಹಗಳಿಗೆ ಅವಕಾಶ ನೀಡದಂತೆ ಎಚ್ಚರಿಕೆ ಇರಲಿ. ಉದ್ಯೋಗಿಗಳಿಗೆ ಶುಭ ಫಲ. ಕೌಟುಂಬಿಕವಾಗಿ ಶುಭ ಫಲ. ಅದೃಷ್ಟ ಸಂಖ್ಯೆ: 5

Horoscope Today

ವೃಷಭ: ಆರ್ಥಿಕವಾಗಿ ಬಳಲುವ ಸಾಧ್ಯತೆ ಇದೆ. ಬಿಡುವಿರದ ಕಾರ್ಯಕ್ರಮದ ಹೊರತಾಗಿಯೂ ಆರೋಗ್ಯ ಚೆನ್ನಾಗಿರುತ್ತದೆ. ವಾಹನ ಖರೀದಿ ವಿಚಾರವಾಗಿ ಚರ್ಚಿಸುವಿರಿ. ಈ ಹಿಂದೆ ನಡೆದ ಘಟನೆ ನೆನಪಿಸಿ ಕೊರಗುವುದು ಬೇಡ. ಸಹದ್ಯೋಗಿಗಳಿಂದ ಅಸಹಕಾರ. ಕೌಟುಂಬಿಕವಾಗಿ ಶುಭ ಫಲ. ಅದೃಷ್ಟ ಸಂಖ್ಯೆ: 4

Horoscope Today

ಮಿಥುನ: ಇತರರ ವಿರುದ್ಧ ದ್ವೇಷ ಕಾರುತ್ತಾ ನಿಮ್ಮ ಮಾನಸಿಕ ಒತ್ತಡವನ್ನು ಹೆಚ್ಚು ಮಾಡಿಕೊಳ್ಳುವುದು ಬೇಡ. ನಕರಾತ್ಮಕ ಆಲೋಚನೆಗಳು ನಿಮ್ಮನ್ನು ಘಾಸಿ ಮಾಡಬಹುದು. ಆರೋಗ್ಯದ ಕುರಿತು ಕಾಳಜಿ ಇರಲಿ. ಉದ್ಯೋಗಿಗಳಿಗೆ ಶುಭಫಲ. ಆರ್ಥಿಕ ಪ್ರಗತಿ ಸಾಧಾರಣವಾಗಿರಲಿದೆ. ಕೌಟುಂಬಿಕವಾಗಿ ಶುಭಫಲ. ಅದೃಷ್ಟ ಸಂಖ್ಯೆ: 2

Horoscope Today

ಕಟಕ: ಅತಿಯಾದ ಉತ್ಸಾಹದಲ್ಲಿ ಅತಿರೇಕದ ಮಾತುಗಳು ಬೇಡ, ಭಾವನೆಗಳನ್ನು ನಿಯಂತ್ರಿಸಿ. ಹಣಕಾಸು ಪ್ರಗತಿ ಸಾಧಾರಣವಾಗಿರಲಿದೆ. ಕುಟುಂಬ ಸದಸ್ಯರ ಬೆಂಬಲ ಸಿಗಲಿದೆ. ಆರೋಗ್ಯದ ಕುರಿತು ಕಾಳಜಿ ಇರಲಿ. ಗೊತ್ತಿಲ್ಲದಂತೆ ಸಮಯ ವ್ಯರ್ಥವಾಗುವ ಸಾಧ್ಯತೆ ಇದೆ. ಉದ್ಯೋಗಿಗಳಿಗೆ ಶುಭಫಲ. ಕೌಟುಂಬಿಕವಾಗಿ ಮಿಶ್ರಫಲ. ಅದೃಷ್ಟ ಸಂಖ್ಯೆ: 6

Horoscope Today

ಸಿಂಹ: ಆರ್ಥಿಕ ಸಮಸ್ಯೆಯಿಂದಾಗಿ ಒತ್ತಡ ಹೆಚ್ಚಾಗಲಿದೆ. ಹಿರಿಯರ ಮಾರ್ಗದರ್ಶನ ಸಿಗಲಿದೆ. ಪ್ರಭಾವಿ ವ್ಯಕ್ತಿಗಳ ಬೆಂಬಲ, ಸ್ನೇಹ ಸಿಗಲಿದೆ. ವಿವಾಹ ಅಪೇಕ್ಷಿತರಿಗೆ ಕಂಕಣಭಾಗ್ಯ ಕೂಡಿ ಬರುವುದು. ವ್ಯಾಪಾರ-ವ್ಯವಹಾರದಲ್ಲಿ ಸಾಧಾರಣ ಪ್ರಗತಿ ಇರಲಿದೆ. ಆರೋಗ್ಯ ಪರಿಪೂರ್ಣವಾಗಿರಲಿದೆ. ಕೌಟುಂಬಿಕವಾಗಿ ಶುಭಫಲ. ಅದೃಷ್ಟ ಸಂಖ್ಯೆ: 4

Horoscope Today

ಕನ್ಯಾ: ಸಕಾರಾತ್ಮಕ ಆಲೋಚನೆಗಳಿಂದ ಕೆಲಸ ಕಾರ್ಯಗಳಲ್ಲಿ ಯಶಸ್ಸು ಸಿಗಲಿದೆ. ಅನಿವಾರ್ಯ ಕಾರಣಗಳಿಂದ ಖರ್ಚು ಹೆಚ್ಚಾಗಲಿದೆ. ಮನೆಯ ಸದಸ್ಯರ ವರ್ತನೆ ನಿಮ್ಮನ್ನು ಮಾನಸಿಕವಾಗಿ ತೊಂದರೆಗಳಾಗುವಂತೆ ಮಾಡುವ ಸಾಧ್ಯತೆ ಇದೆ. ಪ್ರಯಾಣ ಮಾಡಬೇಕಾಗಿ ಬಹುದು. ಉದ್ಯೋಗಿಗಳಿಗೆ ಶುಭಫಲ. ಕೌಟುಂಬಿಕವಾಗಿ ಸಾಧಾರಣ ಫಲ. ಅದೃಷ್ಟ ಸಂಖ್ಯೆ: 3

ಭವಿಷ್ಯ ಮತ್ತು ಜ್ಯೋತಿಷ್ಯಕ್ಕೆ ಸಂಬಂಧಿಸಿದ ಲೇಖನ/ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್‌ (Click Here) ಮಾಡಿ

Horoscope Today

ತುಲಾ: ಆರ್ಥಿಕವಾಗಿ ಬಳಲುವ ಸಾಧ್ಯತೆ ಇದೆ. ಕೆಲಸ ಕಾರ್ಯಗಳು ನಿಧಾನವಾಗಿರಲಿದೆ. ತಾಳ್ಮೆಯಿಂದ ವರ್ತಿಸಿ. ನೆರೆಹೊರೆಯವರೊಂದಿಗೆ ವಿನಾಕಾರಣ ಜಗಳ ಬೇಡ. ಉದ್ಯೋಗಿಗಳಿಗೆ ಶುಭಫಲ. ಆರೋಗ್ಯ ಪರಿಪೂರ್ಣವಾಗಿರಲಿದೆ. ಕೌಟುಂಬಿಕವಾಗಿ ಸಾಧಾರಣ ಫಲ.
ಅದೃಷ್ಟ ಸಂಖ್ಯೆ: 5

Horoscope Today

ವೃಶ್ಚಿಕ:ಪ್ರಯತ್ನದಲ್ಲಿ ನಂಬಿಕೆ ಇಟ್ಟು ಕಾರ್ಯದಲ್ಲಿ ಮುನ್ನುಗ್ಗಿ ಯಶಸ್ಸು ಸಿಗಲಿದೆ. ಆರ್ಥಿಕವಾಗಿ ಲಾಭ ಇರಲಿದೆ. ಸಮಾರಂಭಗಳಲ್ಲಿ ಭಾಗವಹಿಸುವ ನಿರೀಕ್ಷೆ ಇದೆ. ಜನಪ್ರಿಯತೆ ಹೆಚ್ಚಾಗಲಿದೆ. ಪ್ರವಾಸದ ಕುರಿತು ಚರ್ಚೆ ಮಾಡುವಿರಿ. ಕುಟುಂಬದವರ ಸಹಕಾರ ಸಿಗಲಿದೆ. ಆರೋಗ್ಯದ ಕಡೆಗೆ ಗಮನ ಇರಲಿ. ಉದ್ಯೋಗಿಗಳಿಗೆ ಹೊಸ ಭರವಸೆ ಮೂಡಲಿದೆ. ಕೌಟುಂಬಿಕವಾಗಿ ಶುಭಫಲ. ಅದೃಷ್ಟ ಸಂಖ್ಯೆ: 7

Horoscope Today

ಧನಸ್ಸು: ಅತಿಯಾದ ಚಿಂತೆ, ಒತ್ತಡ ನಿಮ್ಮ ಆರೋಗ್ಯದ ಮೇಲೆ ದೈಹಿಕವಾಗಿ ಹಾಗೂ ಮಾನಸಿಕವಾಗಿ ಪರಿಣಾಮವನ್ನು ಬೀರಬಹುದು. ಆದಷ್ಟು ವಿಶ್ರಾಂತಿ ಪಡೆಯಿರಿ, ತಾಳ್ಮೆ ಇರಲಿ. ಆರ್ಥಿಕ ಪ್ರಗತಿ ಸಾಧಾರಣವಾಗಿರಲಿದೆ. ಉದ್ಯೋಗಿಗಳಿಗೆ ಶುಭಫಲ. ಕುಟುಂಬದ ಆಪ್ತರಿಂದ ಸಮಾಧಾನದ ಮಾತುಗಳು. ಕೌಟುಂಬಿಕವಾಗಿ ಶುಭಫಲ. ಅದೃಷ್ಟ ಸಂಖ್ಯೆ: 4

Horoscope Today

ಮಕರ: ಅನಿವಾರ್ಯ ಪ್ರಸಂಗಗಳು ನಿಮ್ಮನ್ನು ಒತ್ತಡಕ್ಕೆ ಒಳಗಾಗುವಂತೆ ಮಾಡಬಹುದು. ಸಭೆ ಸಮಾರಂಭಗಳಲ್ಲಿ ಭಾಗವಹಿಸುವ ಸಾಧ್ಯತೆ ಇದೆ. ಆರೋಗ್ಯ ಪರಿಪೂರ್ಣವಾಗಿರಲಿದೆ. ಆರ್ಥಿಕವಾಗಿ ಪ್ರಗತಿ ಇರಲಿದ್ದು, ಹೂಡಿಕೆಯ ಕುರಿತು ಆಲೋಚನೆ ಮಾಡುವಿರಿ. ಹೊಸ ಸ್ನೇಹಿತರ ಪರಿಚಯವಾಗಲಿದೆ. ಉದ್ಯೋಗದ ಕುರಿತು ಆಲೋಚನೆ ಮಾಡುವಿರಿ. ಕೌಟುಂಬಿಕವಾಗಿ ಶುಭಫಲ. ಅದೃಷ್ಟ ಸಂಖ್ಯೆ: 4

Horoscope Today

ಕುಂಭ: ವಾಹನ ಚಾಲನೆ ಮಾಡುವಾಗ ಜಾಗರೂಕತೆಯಿಂದ ಚಾಲನೆ ಮಾಡಿ, ಅಪಘಾತವಾಗುವ ಸಾಧ್ಯತೆ ಇದೆ. ಅವಸರದಲ್ಲಿ ಕೆಲಸ ಮಾಡುವುದು ಬೇಡ. ಹೂಡಿಕೆ, ವ್ಯಾಪಾರ ವ್ಯವಹಾರಗಳಲ್ಲಿ ಪ್ರಗತಿ ಇರಲಿದೆ. ದಿಢೀರ್ ಪ್ರಯಾಣ ಬೆಳೆಸಬೇಕಾಗಬಹುದು. ಆರೋಗ್ಯದ ಕುರಿತು ಕಾಳಜಿ ಇರಲಿ. ಉದ್ಯೋಗಿಗಳಿಗೆ ಸಾಧಾರಣ ಫಲ. ಕೌಟುಂಬಿಕವಾಗಿ ಕನಿಷ್ಠ ಫಲ ಇರಲಿದೆ. ಅದೃಷ್ಟ ಸಂಖ್ಯೆ: 2

Horoscope Today

ಮೀನ: ದಿನದ ಮಟ್ಟಿಗೆ ಅನಿವಾರ್ಯ ಕಾರಣಗಳಿಂದ ಖರ್ಚು ಇರಲಿದೆ. ಆರೋಗ್ಯ ಮಧ್ಯಮವಾಗಿರಲಿದೆ. ಧಾರ್ಮಿಕ ಕಾರ್ಯಕ್ರಮಗಳಲ್ಲಿ ಭಾಗಿಯಾಗುವ ಸಾಧ್ಯತೆ ಇದೆ. ಮಾತಿನ ಭರದಲ್ಲಿ ಅತಿರೇಕದ ಮಾತುಗಳು ಬೇಡ, ತಾಳ್ಮೆಯಿಂದ ವರ್ತಿಸಿ. ಆರೋಗ್ಯ ಪರಿಪೂರ್ಣವಾಗಿರಲಿದೆ. ಕೌಟುಂಬಿಕವಾಗಿ ಶುಭ ಫಲ. ಅದೃಷ್ಟ ಸಂಖ್ಯೆ: 8

Horoscope Today

ವಿದ್ವಾನ್ ಶ್ರೀ ನವೀನಶಾಸ್ತ್ರಿ ರಾ. ಪುರಾಣಿಕ
ಖ್ಯಾತ ಜ್ಯೋತಿಷಿ ಹಾಗೂ ಉಪನ್ಯಾಸಕರು

M: 9481854580 | pnaveenshastri@gmail.com

Continue Reading

ಪ್ರಮುಖ ಸುದ್ದಿ

Dina Bhavishya: ಈ ರಾಶಿಯವರಿಗೆ ಹೊಸ ಅವಕಾಶಗಳು ಹುಡುಕಿಕೊಂಡು ಬರಲಿವೆ!

Dina Bhavishya: ಶ್ರೀ ಶಕೇ 1946, ಕ್ರೋಧಿನಾಮ ಸಂವತ್ಸರ, ಉತ್ತರಾಯಣ, ವಸಂತ ಋತು, ವೈಶಾಖ ಮಾಸ, ಕೃಷ್ಣ ಪಕ್ಷದ ಅಮಾವಾಸ್ಯೆ ದಿನವಾದ ಇಂದು ದ್ವಾದಶ ರಾಶಿಗಳ ಭವಿಷ್ಯ ಹೇಗಿದೆ ಎಂಬ ಮಾಹಿತಿಯನ್ನು ಇಲ್ಲಿ ನೀಡಲಾಗಿದೆ.

VISTARANEWS.COM


on

Dina Bhavishya
Koo

ಚಂದ್ರನು ವೃಷಭ ರಾಶಿಯಿಂದ ಬುಧವಾರ ಬೆಳಗ್ಗೆ 04:36ಕ್ಕೆ ಮಿಥುನ ರಾಶಿಯನ್ನು ಪ್ರವೇಶಿಸಿದ್ದಾನೆ. ಇದರಿಂದಾಗಿ ವೃಷಭ, ಕಟಕ, ಸಿಂಹ, ವೃಶ್ಚಿಕ, ಧನಸ್ಸು, ಮೀನ ರಾಶಿಯವರಿಗೆ ಚಂದ್ರನ ಬಲ ದೊರೆಯಲಿದೆ. ಇಂದಿನ ದಿನ ಭವಿಷ್ಯವನ್ನು (Dina Bhavishya) ನೋಡುವುದಾದರೆ, ಸಿಂಹರಾಶಿಯವರ ಕಾರ್ಯಗಳಿಗೆ ಇತರರು ಪ್ರಶಂಸೆ ವ್ಯಕ್ತಪಡಿಸಲಿದ್ದಾರೆ. ಇವರಿಗೆ ಹೊಸ ಅವಕಾಶಗಳು ಹುಡುಕಿಕೊಂಡು ಬರಲಿವೆ. ಇನ್ನು ಕುಂಭ ರಾಶಿಯವರಿಗೆ ಅಧಿಕ ಶ್ರಮದಿಂದ ಆರೋಗ್ಯ ಕೊಂಚ ಹದಗೆಡುವ ಸಾಧ್ಯತೆ ಇದೆ. ಇದೂ ಸೇರಿದಂತೆ ದ್ವಾದಶ ರಾಶಿಗಳ ಇಂದಿನ ಭವಿಷ್ಯ ಹೇಗಿದೆ? ಪಂಚಾಂಗ ಏನು ಹೇಳುತ್ತದೆ ಎಂಬುದನ್ನು ತಿಳಿಯೋಣ.

ಇಂದಿನ ಪಂಚಾಂಗ (kannada panchanga) (6-06-2024)

ಶ್ರೀ ಶಕೇ 1946, ಕ್ರೋಧಿನಾಮ ಸಂವತ್ಸರ, ಉತ್ತರಾಯಣ, ವಸಂತ ಋತು, ವೈಶಾಖ ಮಾಸ, ಕೃಷ್ಣ ಪಕ್ಷ.
ತಿಥಿ: ಅಮಾವಾಸ್ಯೆ 18:06 ವಾರ: ಗುರುವಾರ
ನಕ್ಷತ್ರ: ರೋಹಿಣಿ 20:15 ಯೋಗ: ಧೃತಿ 22:07
ಕರಣ: ಚತುಷ್ಪಾದ 06:57 ಅಮೃತ ಕಾಲ: ಸಂಜೆ 5:12 ರಿಂದ 06:44 ರವರಗೆ
ದಿನದ ವಿಶೇಷ: ಸಿಂಧಗಿ ಸಿದ್ದೇಶ್ವರ ಜಾತ್ರೆ

ಸೂರ್ಯೋದಯ : 05:53   ಸೂರ್ಯಾಸ್ತ : 06:44

ರಾಹುಕಾಲ : ಮಧ್ಯಾಹ್ನ 1:30 ರಿಂದ 3:00
ಗುಳಿಕಕಾಲ: ಬೆಳಗ್ಗೆ 9.00 ರಿಂದ 10.30
ಯಮಗಂಡಕಾಲ: ಬೆಳಗ್ಗೆ 6.00 ರಿಂದ 7.30

ದ್ವಾದಶ ರಾಶಿ ಭವಿಷ್ಯ (Dina Bhavishya in Kannada)

Horoscope Today

ಮೇಷ: ಮಾನಸಿಕ ಒತ್ತಡದಿಂದ ಹೊರಬರಲು ಆಧ್ಯಾತ್ಮಿಕ ವ್ಯಕ್ತಿಗಳನ್ನು ಭೇಟಿಯಾಗುವ ಸಾಧ್ಯತೆ ಇದೆ. ಪ್ರಮುಖ ನಿರ್ಧಾರಗಳನ್ನು ಕೈಗೊಳ್ಳುವ ಮುನ್ನ ಆಲೋಚಿಸಿ. ಆಪ್ತ ವ್ಯಕ್ತಿಗಳಿಗೆ ಸಹಾಯ ಮಾಡಲಿದ್ದೀರಿ. ಮನೆಯಲ್ಲಿ ಕಲಹಗಳಿಗೆ ಆಸ್ಪದ ಕೊಡಬೇಡಿ. ಆರೋಗ್ಯ ಪರಿಪೂರ್ಣ. ಉದ್ಯೋಗಿಗಳಿಗೆ ಕಿರಿಕಿರಿ. ಕೌಟುಂಬಿಕವಾಗಿ ಸಾಧಾರಣ ಫಲ. ಅದೃಷ್ಟ ಸಂಖ್ಯೆ: 4

Horoscope Today

ವೃಷಭ: ಅತಿರೇಕದಲ್ಲಿ ಮಾತನಾಡುವ ಮುನ್ನ ಯೋಚಿಸಿ. ತಿಳಿಯದೆ ನಿಮ್ಮ ಅಭಿಪ್ರಾಯಗಳು ಬೇರೊಬ್ಬರ ಭಾವನೆಗಳಿಗೆ ಧಕ್ಕೆಯುಂಟು ಮಾಡಬಹುದು. ದಿನದ ಮಟ್ಟಿಗೆ ಖರ್ಚು ಹೆಚ್ಚಾಗಬಹುದು. ಉದ್ಯೋಗಿಗಳಿಗೆ ಶುಭ ಫಲ. ಕುಟಂಬದಲ್ಲಿ ನೆಮ್ಮದಿ ಇರಲಿದೆ. ಅದೃಷ್ಟ ಸಂಖ್ಯೆ: 3

Horoscope Today

ಮಿಥುನ: ಆರೋಗ್ಯ ಪರಿಪೂರ್ಣವಾಗಿರುತ್ತದೆ. ಸ್ನೇಹಿತರಿಗೆ ಸಹಾಯ ಮಾಡುವ ಸಾಧ್ಯತೆ ಇದೆ. ಆರ್ಥಿಕ ಪ್ರಗತಿ ಸಾಧಾರಣವಾಗಿರಲಿದ್ದು, ಸಕರಾತ್ಮಕ ಆಲೋಚನೆಗಳು ಪುಷ್ಟಿ ನೀಡುತ್ತದೆ. ಉದ್ಯೋಗಿಗಳಿಗೆ ಸ್ವಲ್ಪ ಕಿರಿಕಿರಿ ಇರಲಿದ್ದು, ಕೌಟುಂಬಿಕವಾಗಿ ಸಾಧಾರಣ ಫಲ.
ಅದೃಷ್ಟ ಸಂಖ್ಯೆ: 1

Horoscope Today

ಕಟಕ: ಕೆಲಸ ಕಾರ್ಯಗಳಲ್ಲಿ ಒತ್ತಡ ಉಂಟುಮಾಡುವ ವಿಚಾರಗಳಿಂದ ದೂರ ಇರಿ. ತಾಳ್ಮೆ ಇರಲಿ. ಅಗತ್ಯಕ್ಕಾಗಿ ಯಾರಾದರೂ ಹಣದ ಸಹಾಯ ಬೇಡುವ ಸಾಧ್ಯತೆ ಇದ್ದು, ಆಲೋಚಿಸಿ ಮುಂದುವರಿಯಿರಿ. ಆರೋಗ್ಯದ ಬಗ್ಗೆ ಕಾಳಜಿ ಇರಲಿ. ಉದ್ಯೋಗಿಗಳಿಗೆ ಶುಭ ಫಲ.ಕೌಟುಂಬಿಕವಾಗಿ ಸಾಧಾರಣ ಫಲ. ಅದೃಷ್ಟ ಸಂಖ್ಯೆ: 5

Horoscope Today

ಸಿಂಹ: ಇತರರು ನಿಮ್ಮ ಕಾರ್ಯಗಳಿಗೆ ಪ್ರಶಂಸೆ ವ್ಯಕ್ತಪಡಿಸಲಿದ್ದಾರೆ. ನಿಮ್ಮನ್ನು ಹೊಸ ಅವಕಾಶಗಳು ಹುಡುಕಿಕೊಂಡು ಬರಲಿವೆ. ಆರ್ಥಿಕ ಪ್ರಗತಿ ಸಾಧಾರಣ. ಉದ್ಯೋಗ, ಆರೋಗ್ಯ, ಕೌಟುಂಬಿಕವಾಗಿ ಶುಭ ಫಲವಿರಲಿದೆ. ಅದೃಷ್ಟ ಸಂಖ್ಯೆ: 3

Horoscope Today

ಕನ್ಯಾ: ನಿಮ್ಮ ಒತ್ತಡವನ್ನು ಇತರರ ಮೇಲೆ ಹಾಕಿ ಕೋಪಗೊಳ್ಳುವುದು ಬೇಡ. ಸಮಾಧಾನದಿಂದ ವರ್ತಿಸಿ. ಆರ್ಥಿಕವಾಗಿ ಸಾಧಾರಣ ಫಲವಿರಲಿದೆ. ಆರೋಗ್ಯದ ಕುರಿತು ಹೆಚ್ಚು ಕಾಳಜಿ ವಹಿಸಿ. ಉದ್ಯೋಗಿಗಳಿಗೆ ಶುಭ ಫಲ. ಕೌಟುಂಬಿಕವಾಗಿ ಶುಭ ಫಲ.
ಅದೃಷ್ಟ ಸಂಖ್ಯೆ: 2

ಭವಿಷ್ಯ ಮತ್ತು ಜ್ಯೋತಿಷ್ಯಕ್ಕೆ ಸಂಬಂಧಿಸಿದ ಲೇಖನ/ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್‌ (Click Here) ಮಾಡಿ

Horoscope Today

ತುಲಾ: ಆಪ್ತರೊಂದಿಗೆ ಬಾಲ್ಯದ ನೆನಪು ಹಂಚಿಕೊಳ್ಳುವಿರಿ. ಮನಸ್ಸಿನ ಒತ್ತಡ ಈ ಮೂಲಕ ಹೊರಹಾಕುವಿರಿ. ಆರೋಗ್ಯ ಮಧ್ಯಮ. ಹೂಡಿಕೆ, ವ್ಯಾಪಾರ ವ್ಯವಹಾರಗಳಲ್ಲಿ ಉತ್ತಮ ಫಲಿತಾಂಶ ಇರಲಿದೆ. ಕೈಗೊಂಡ ಕಾರ್ಯದಲ್ಲಿ ನಿಧಾನಗತಿಯ ಪ್ರಗತಿ ಇರಲಿದ್ದು, ಕೌಟುಂಬಿಕವಾಗಿ ಶುಭ ಫಲ. ಅದೃಷ್ಟ ಸಂಖ್ಯೆ: 4

Horoscope Today

ವೃಶ್ಚಿಕ: ಕೆಲಸ ಕಾರ್ಯಗಳಲ್ಲಿ ಯಶಸ್ಸು ಸಿಗಲಿದೆ. ಆರ್ಥಿಕವಾಗಿ ಪ್ರಗತಿ ಇರಲಿದ್ದು, ನಿಮ್ಮ ನಿರೀಕ್ಷೆಗೆ ತಕ್ಕಂತೆ ಪ್ರತಿಫಲ ಸಿಗುವುದು. ಆರೋಗ್ಯ ಪರಿಪೂರ್ಣ. ಉದ್ಯೋಗಿಗಳಿಗೆ ಕಿರಿಕಿರಿ ಸಾಧ್ಯತೆ. ಈ ಹಿಂದೆ ನಿಮ್ಮನ್ನು ದ್ವೇಷಿಸುತ್ತಿದ್ದ ಜನರು ನಿಮ್ಮೊಂದಿಗೆ ಪ್ರೀತಿಯಿಂದ ವರ್ತಿಸುವ ಸಾಧ್ಯತೆ. ಕೌಟುಂಬಿಕವಾಗಿ ಶುಭ ಫಲ. ಅದೃಷ್ಟ ಸಂಖ್ಯೆ: 6

Horoscope Today

ಧನಸ್ಸು: ಚುರುಕುತನದಿಂದ ಕಾರ್ಯದಲ್ಲಿ ಯಶಸ್ಸು ಸಿಗಲಿದೆ. ಹಣಕಾಸು ಹೂಡಿಕೆ ವ್ಯವಹಾರದಲ್ಲಿ ಲಾಭ. ಹೊಸ ಸ್ನೇಹಿತರ ಪರಿಚಯ ಆಗಲಿದೆ. ಆರೋಗ್ಯ ಪರಿಪೂರ್ಣ. ಕುಟುಂಬದ ಸದಸ್ಯರ ಬೆಂಬಲ ಸಿಗಲಿದ್ದು, ಕೌಟುಂಬಿಕವಾಗಿ ಶುಭ ಫಲ ಇರಲಿದೆ. ಅದೃಷ್ಟ ಸಂಖ್ಯೆ: 3

Horoscope Today

ಮಕರ: ಸಮಯ ವ್ಯರ್ಥಮಾಡಿ ಕೊರಗುವುದು ಬೇಡ. ಅನಗತ್ಯವಾಗಿ ಖರ್ಚು ಮಾಡುವ ಸಾಧ್ಯತೆ ಇದೆ. ಉತ್ತಮ ಆಲೋಚನೆಗಳು ಇರಲಿ. ಹಳೆಯ ನೆನಪುಗಳು ಮಾನಸಿಕ ಒತ್ತಡ ಉಂಟುಮಾಡುವ ಸಾಧ್ಯತೆ. ದೈಹಿಕ ಆರೋಗ್ಯ ಉತ್ತಮ. ವಿನಾಕಾರಣ ಕುಟುಂಬದ ಸದಸ್ಯರೊಂದಿಗೆ ಕಲಹಗಳು ಸೃಷ್ಟಿ ಆಗುವ ಸಾಧ್ಯತೆ. ಕೌಟುಂಬಿಕವಾಗಿ ಸಾಧಾರಣ ಫಲ.
ಅದೃಷ್ಟ ಸಂಖ್ಯೆ: 3

Horoscope Today

ಕುಂಭ: ಅಧಿಕ ಶ್ರಮದಿಂದ ಆರೋಗ್ಯ ಕೊಂಚ ಹದಗೆಡುವ ಸಾಧ್ಯತೆ, ಕಾಳಜಿ ಇರಲಿ. ಸಾಂಕ್ರಮಿಕ ರೋಗದ ಬಾಧೆ ಸಾಧ್ಯತೆ ಇದ್ದು, ಆದಷ್ಟು ಮುಂಜಾಗ್ರತೆ ವಹಿಸುವುದು ಒಳ್ಳೆಯದು. ಸ್ನೇಹಿತರ ಸಹಕಾರ ಸಿಗಲಿದೆ. ಸಂಗಾತಿಯೊಂದಿಗೆ ಮಾತು ಬೆಳೆಸುವುದು ಬೇಡ. ಕೌಟುಂಬಿಕವಾಗಿ ಸಾಧಾರಣ ಫಲ. ಅದೃಷ್ಟ ಸಂಖ್ಯೆ: 9

Horoscope Today

ಮೀನ: ಅಗತ್ಯ ವಸ್ತುಗಳ ಖರೀದಿಯಿಂದ ಖರ್ಚು. ಆರೋಗ್ಯ ಪರಿಪೂರ್ಣ. ಕುಟುಂಬದಲ್ಲಿ ಕಲಹಗಳಿಗೆ ಅವಕಾಶ ಮಾಡಿಕೊಡಬೇಡಿ. ಉದ್ಯೋಗದಲ್ಲಿ ಹೊಸ ಭರವಸೆ. ಆಧ್ಯಾತ್ಮಿಕತೆಯಿಂದ ಮನಸ್ಸಿನ ಒತ್ತಡದಿಂದ ಹೊರಬರಲು ಸಾಧ್ಯ. ಕೌಟುಂಬಿಕವಾಗಿ ಮಿಶ್ರ ಫಲ.
ಅದೃಷ್ಟ ಸಂಖ್ಯೆ: 7

Horoscope Today

ವಿದ್ವಾನ್ ಶ್ರೀ ನವೀನಶಾಸ್ತ್ರಿ ರಾ. ಪುರಾಣಿಕ
ಖ್ಯಾತ ಜ್ಯೋತಿಷಿ ಹಾಗೂ ಉಪನ್ಯಾಸಕರು

M: 9481854580 | pnaveenshastri@gmail.com

Continue Reading
Advertisement
Narendra Modi
ದೇಶ22 mins ago

Narendra Modi: ‌ಮೋದಿ ಪ್ರಮಾಣವಚನ ಸಂಭ್ರಮಕ್ಕೆ ಗಣ್ಯರ ದಂಡೇ ಸಾಕ್ಷಿ; ದೇಶ-ವಿದೇಶಗಳ ಗಣ್ಯರ ಪಟ್ಟಿ ಹೀಗಿದೆ

Modi 3.0 Cabinet
ಪ್ರಮುಖ ಸುದ್ದಿ52 mins ago

Modi 3.0 Cabinet: ಮೋದಿ 3ನೇ ಅವಧಿಯಲ್ಲಿ ಯಾರಿಗೆಲ್ಲ ಮಂತ್ರಿ ಭಾಗ್ಯ? ರೇಸ್‌ನಲ್ಲಿ ಯಾರಿದ್ದಾರೆ? ಇಲ್ಲಿದೆ ಪಟ್ಟಿ

Eating Style
ಲೈಫ್‌ಸ್ಟೈಲ್53 mins ago

Eating Style: ಉಣ್ಣುವ ರೀತಿ ನಾವು ಎಂಥವರು ಎನ್ನುವುದನ್ನು ಬಯಲು ಮಾಡುತ್ತದೆ! ಅದು ಹೇಗೆ?

Narendra Modi
ದೇಶ1 hour ago

Narendra Modi: ಮೋದಿ ಪ್ರಮಾಣವಚನ; ಇಂದಿನ ಕಾರ್ಯಕ್ರಮ ಏನೇನು? ಹೇಗಿದೆ ಭದ್ರತೆ, ಸಿದ್ಧತೆ?

karnataka weather forecast
ಮಳೆ1 hour ago

Karnataka Weather : ಬೆಂಗಳೂರು ಸೇರಿ ರಾಜ್ಯದಲ್ಲಿ ಇನ್ನೆಷ್ಟು ದಿನ ಮಳೆ ಅಬ್ಬರ?

Narendra Modi
ದೇಶ2 hours ago

Narendra Modi: 3ನೇ ಬಾರಿ ಪ್ರಧಾನಿಯಾಗಿ ಇಂದು ಸಂಜೆ ಮೋದಿ ಪ್ರಮಾಣ; ಇಲ್ಲಿದೆ ಬಾಲ್ಯದಿಂದ ವಿಶ್ವನಾಯಕತನಕದ ಜೀವನ ಚಿತ್ರಣ

5:2 Diet
ಆರೋಗ್ಯ2 hours ago

5:2 Diet: ಏನಿದು 5:2 ಮಧ್ಯಂತರ ಉಪವಾಸ? ಇದರ ಪ್ರಯೋಜನಗಳೇನು?

IND vs PAK
ಕ್ರೀಡೆ2 hours ago

IND vs PAK: ಇಂದು ಇಂಡೋ-ಪಾಕ್​ ರೋಚಕ ಟಿ20 ಕದನ; ವಿಜಯ ಪತಾಕೆ ಹಾರಿಸಲಿ ಭಾರತ

Dina Bhavishya
ಭವಿಷ್ಯ3 hours ago

Dina Bhavishya : ಗೌಪ್ಯ ವಿಷಯಗಳನ್ನು ಹಂಚಿಕೊಳ್ಳುವ ಮುನ್ನ ಇರಲಿ ಎಚ್ಚರಿಕೆ

NED vs RSA
T20 ವಿಶ್ವಕಪ್8 hours ago

NED vs RSA: ಹೋರಾಡಿ ಸೋತ ನೆದರ್ಲೆಂಡ್ಸ್​; ಹರಿಣ ಪಡೆಗೆ ಪ್ರಯಾಸದ ಗೆಲುವು

Sharmitha Gowda in bikini
ಕಿರುತೆರೆ8 months ago

Geetha Serial Kannada: ನಿದ್ದೆ ಕದ್ದ ಚೋರಿ! ನಟಿ `ಭಾನುಮತಿ’ ಹಾಟ್‌ ಪೋಟೊಗಳಿಗೆ ಫ್ಯಾನ್ಸ್ ಫುಲ್ ಫಿದಾ

Kannada Serials
ಕಿರುತೆರೆ8 months ago

Kannada Serials TRP: 2ನೇ ಸ್ಥಾನದಲ್ಲಿ 2 ಧಾರಾವಾಹಿಗಳು; ಟಿಆರ್‌ಪಿ ರೇಸ್‌ನಲ್ಲಿಲ್ಲ ಭಾಗ್ಯಲಕ್ಷ್ಮೀ!

Bigg Boss- Saregamapa 20 average TRP
ಕಿರುತೆರೆ8 months ago

Kannada Serials TRP: ಏಳನೇ ಸ್ಥಾನಕ್ಕೆ ʻಅಮೃತಧಾರೆʼ ಕುಸಿತ; ಬಿಗ್‌ ಬಾಸ್‌-ಸರಿಗಮಪ ಟಿಆರ್‌ಪಿ ಎಷ್ಟು?

galipata neetu
ಕಿರುತೆರೆ6 months ago

Kanyadana Serial: ಕಿರುತೆರೆಗೆ ಮತ್ತೆ ಎಂಟ್ರಿ ಕೊಟ್ಟ ʻಗಾಳಿಪಟʼ ಖ್ಯಾತಿಯ ʻನೀತುʼ!

Kannada Serials
ಕಿರುತೆರೆ8 months ago

Kannada Serials TRP: ನಾಲ್ಕನೇ ಸ್ಥಾನಕ್ಕೆ ಕುಸಿತ ಕಂಡ ʻಸೀತಾ ರಾಮʼ; ಟಿಆರ್‌ಪಿ ರೇಸ್‌ಗೆ ʻಭಾಗ್ಯಲಕ್ಷ್ಮಿʼ ಬ್ಯಾಕ್‌!

Kannada Serials
ಕಿರುತೆರೆ8 months ago

Kannada Serials TRP: ಟಿಆರ್‌ಪಿಯಲ್ಲಿ ʻಭಾಗ್ಯಲಕ್ಷ್ಮೀʼ ಹವಾ; ʻಪುಟ್ಟಕ್ಕನ ಮಕ್ಕಳುʼ ಧಾರಾವಾಹಿಗೆ ಸಂಕಷ್ಟ!

Bigg Boss' dominates TRP; Sita Rama fell to the sixth position
ಕಿರುತೆರೆ8 months ago

Kannada Serials TRP: ಟಿಆರ್‌ಪಿಯಲ್ಲಿ ʻಬಿಗ್ ಬಾಸ್ʼದೇ ಮೇಲುಗೈ; 6ನೇ ಸ್ಥಾನಕ್ಕೆ ಕುಸಿದ ʻಸೀತಾ ರಾಮʼ

geetha serial Dhanush gowda engagement
ಕಿರುತೆರೆ6 months ago

Dhanush Gowda: ಗೀತಾ ಧಾರಾವಾಹಿ ನಟನ ನಿಶ್ಚಿತಾರ್ಥ; ಭವ್ಯಾಳ ಕಮೆಂಟ್‌ ಬಾಕ್ಸ್‌ ಆಫ್‌!

varun
ಕಿರುತೆರೆ7 months ago

Brindavana Serial: ʼಬೃಂದಾವನʼ ಧಾರಾವಾಹಿಯಲ್ಲಿ ದೊಡ್ಡ ಟ್ವಿಸ್ಟ್‌; ಪ್ರಮುಖ ಪಾತ್ರಧಾರಿಯೇ ಬದಲು

Kannada Serials
ಕಿರುತೆರೆ9 months ago

Kannada Serials TRP: ಟಿಆರ್‌ಪಿಯಲ್ಲಿ ಏರಿಕೆ ಕಂಡ ʻಅಮೃತಧಾರೆʼ; ʻಗಟ್ಟಿಮೇಳʼಕ್ಕೆ ನಾಲ್ಕನೇ ಸ್ಥಾನ!

Karnataka weather Forecast
ಮಳೆ2 days ago

Karnataka weather : ಮಳೆಯಲ್ಲೆ ತಪಸ್ಸಿಗೆ ಕುಳಿತ ವೃದ್ಧ; ಇನ್ನೊಂದು ವಾರ ನಾನ್‌ ಸ್ಟಾಪ್‌ ವರುಣನ ಅಬ್ಬರ

Sigandur launch
ಶಿವಮೊಗ್ಗ2 days ago

Sigandur launch: ಸಿಗಂದೂರು ಲಾಂಚ್‌ನಲ್ಲಿ ಭಾರಿ ವಾಹನಗಳಿಗೆ ನಿರ್ಬಂಧ

Karnataka Rain
ಮಳೆ3 days ago

Karnataka Rain : ಭಾರಿ ಮಳೆಗೆ ಮರ ಬಿದ್ದು ಮೇಕೆಗಳು ಸಾವು; ಸಿಡಿಲಿಗೆ ಎಲೆಕ್ಟ್ರಿಕ್‌ ಅಂಗಡಿ ಸುಟ್ಟು ಭಸ್ಮ

Lok Sabha Election Result 2024 Live
ದೇಶ5 days ago

Lok Sabha Election Result 2024 Live: ಲೋಕಸಭೆ ಚುನಾವಣೆ ಫಲಿತಾಂಶದ ಲೈವ್‌ ಇಲ್ಲಿ ವೀಕ್ಷಿಸಿ

Karnataka Rain
ಮಳೆ6 days ago

Karnataka Rain : 133 ವರ್ಷದ ರೆಕಾರ್ಡ್ ಬ್ರೇಕ್ ಮಾಡಿದ ʻಬೆಂಗಳೂರು ಮಳೆʼ

Snake Rescue Snakes spotted in heavy rain
ಮಳೆ6 days ago

Snake Rescue: ಮಳೆ ನೀರಿನಲ್ಲಿ ಹರಿದು ಬಂದು ಬೈಕ್‌ನಲ್ಲಿ ಸೇರಿಕೊಂಡ ಹಾವು; ಮನೆಗಳಲ್ಲೂ ಪ್ರತ್ಯಕ್ಷ

Karnataka Rain
ಮಳೆ7 days ago

Karnataka Rain : ವೀಕೆಂಡ್‌ ಮೋಜಿಗೆ ವರುಣ ಅಡ್ಡಿ; ಭಾನುವಾರ ಸಂಜೆಗೆ ಮಳೆ ಕಾಟ

Liquor ban
ಬೆಂಗಳೂರು1 week ago

Liquor Ban : ಮುಂದಿನ ಏಳು ದಿನಗಳಲ್ಲಿ ನಾಲ್ಕೂವರೆ ದಿನ ಬಾರ್ ಕ್ಲೋಸ್; ಎಣ್ಣೆ ಸಿಗೋದು ಯಾವ ದಿನ?

Assault Case in Shivamogga
ಕ್ರೈಂ1 week ago

Assault Case : ಶಿವಮೊಗ್ಗದಲ್ಲಿ ಮತ್ತೆ ಬಾಲ ಬಿಚ್ಚಿದ ಪುಂಡರು; ಗಾಂಜಾ ನಶೆಯಲ್ಲಿ ವಾಹನಗಳು ಪೀಸ್‌ ಪೀಸ್‌

Karnataka weather Forecast
ಮಳೆ2 weeks ago

Karnataka Weather : ಚಿಕ್ಕಮಗಳೂರಲ್ಲಿ ಭಾರಿ ಮಳೆ; ಯಾದಗಿರಿಯಲ್ಲಿ ಕರೆಂಟ್‌ ಕಟ್‌, ಜನರೇಟರ್‌ನಿಂದ ಮೊಬೈಲ್‌ಗಳಿಗೆ ಚಾರ್ಜಿಂಗ್‌!

ಟ್ರೆಂಡಿಂಗ್‌