horoscope today read your daily horoscope predictions for june‌ 21 2023Horoscope Today : ಈ ಎಲ್ಲ ರಾಶಿಯವರಿಗೆ ಇಂದು ಉದ್ಯೋಗದಲ್ಲಿ ಯಶಸ್ಸು ಖಚಿತ! - Vistara News

ಪ್ರಮುಖ ಸುದ್ದಿ

Horoscope Today : ಈ ಎಲ್ಲ ರಾಶಿಯವರಿಗೆ ಇಂದು ಉದ್ಯೋಗದಲ್ಲಿ ಯಶಸ್ಸು ಖಚಿತ!

ಶ್ರೀ ಶಕೇ 1945, ಶೋಭಕೃತ್ ನಾಮ ಸಂವತ್ಸರ, ಉತ್ತರಾಯಣ, ಗ್ರೀಷ್ಮ ಋತು, ಆಷಾಢ ಮಾಸ, ಶುಕ್ಲ ಪಕ್ಷದ ತದಿಗೆಯ ದಿನವಾದ ಇಂದು ದ್ವಾದಶ ರಾಶಿಗಳ ಭವಿಷ್ಯ (Horoscope Today) ಹೇಗಿದೆ ಎಂಬ ಮಾಹಿತಿಯನ್ನು ಇಲ್ಲಿ ನೀಡಲಾಗಿದೆ.

VISTARANEWS.COM


on

horoscope today
ಮಹತ್ವದ, ಕುತೂಹಲಕರ ಸುದ್ದಿಗಾಗಿ ಫಾಲೊ ಮಾಡಿ
Koo

ಇಂದಿನ ಪಂಚಾಂಗ (21-06-2023)

ಶ್ರೀ ಶಕೇ 1945, ಶೋಭಕೃತ್‌ ನಾಮ ಸಂವತ್ಸರ, ಉತ್ತರಾಯಣ,
ಗ್ರೀಷ್ಮ ಋತು, ಆಷಾಢ ಮಾಸ, ಶುಕ್ಲ ಪಕ್ಷ.

ತಿಥಿ: ತದಿಗೆ 15:09 ವಾರ: ಬುಧವಾರ
ನಕ್ಷತ್ರ: ಪುಷ್ಯ 25:19 ಯೋಗ: ವ್ಯಾಘಾತ 26:33
ಕರಣ: ಗರಜ 15:09 ಇಂದಿನ ವಿಶೇಷ: ಅಂತಾರಾಷ್ಟ್ರೀಯ ಯೋಗ ದಿನಾಚರಣೆ, ವಿಶ್ವ ಸಂಗೀತ ದಿನ.
ಅಮೃತಕಾಲ: ಸಂಜೆ 06 ಗಂಟೆ 13 ನಿಮಿಷದಿಂದ ರಾತ್ರಿ 08 ಗಂಟೆಯವರೆಗೆ.

ಸೂರ್ಯೋದಯ : 05:55 ಸೂರ್ಯಾಸ್ತ : 06:48

ರಾಹುಕಾಲ : ಮಧ್ಯಾಹ್ನ 12.00 ರಿಂದ 1.30
ಗುಳಿಕಕಾಲ: ಬೆಳಗ್ಗೆ 7.30 ರಿಂದ 9.00
ಯಮಗಂಡಕಾಲ: ಬೆಳಗ್ಗೆ 7.30 ರಿಂದ 9.00

ದ್ವಾದಶ ರಾಶಿ ಭವಿಷ್ಯ (Horoscope Today)

Horoscope Today

ಮೇಷ: ಇಂದು ನಿಮ್ಮ ಅನೇಕ ಸಮಸ್ಯೆಗಳಿಗೆ ಪರಿಹಾರ ಸಿಗಲಿದೆ. ಮಾನಸಿಕ ಒತ್ತಡದಿಂದ ಮುಕ್ತರಾಗಿ, ದೊಡ್ಡ ಯೋಜನೆಗೆ ಗಮನ ಹರಿಸುವಿರಿ. ಬಹಳ ದಿನಗಳ ನಂತರ ಸ್ನೇಹಿತರೊಂದಿಗೆ ಕಾಲ ಕಳೆಯುವ ಸಾಧ್ಯತೆ. ಆರೋಗ್ಯ ಪರಿಪೂರ್ಣ. ಹಣಕಾಸು ಪ್ರಗತಿ ಸಾಮಾನ್ಯ. ಕೌಟುಂಬಿಕವಾಗಿ ಶುಭ ಫಲ.
ಅದೃಷ್ಟ ಸಂಖ್ಯೆ: 1

Horoscope Today

ವೃಷಭ: ಕುಟುಂಬದ ಸದಸ್ಯರ ವರ್ತನೆ ನಿಮಗೆ ಹಿಡಿಸದಿರಬಹುದು, ಆದರೆ ವಿನಾ ಕಾರಣ ಮಾತಿಗಿಳಿದು ಮನಸ್ಸು ಕೆಡಿಸಿಕೊಳ್ಳುವುದು ಬೇಡ. ನಂಬಿದ ವ್ಯಕ್ತಿಗಳು ನಿಮ್ಮನ್ನು ನಿರಾಸೆ ಮಾಡಬಹುದು. ಉದ್ಯೋಗದ ಸ್ಥಳದಲ್ಲಿ ನಿಮ್ಮ ಕಾರ್ಯದ ಯಶಸ್ಸು ಬೇರೆಯವರ ಪಾಲಾಗದಂತೆ ಎಚ್ಚರಿಕೆ ಇರಲಿ. ಆರೋಗ್ಯ ಪರಿಪೂರ್ಣ. ಹಣಕಾಸು ಪ್ರಗತಿ ಸಾಧಾರಣ. ಕೌಟುಂಬಿಕವಾಗಿ ಶುಭ ಫಲ.
ಅದೃಷ್ಟ ಸಂಖ್ಯೆ: 1

Horoscope Today

ಮಿಥುನ: ಆರೋಗ್ಯದ ಕಡೆಗೆ ಹೆಚ್ಚು ಗಮನ ಹರಿಸುವುದು ಉತ್ತಮ. ಅದರಲ್ಲೂ ಗರ್ಭಿಣಿಯರು ಹೆಚ್ಚು ಕಾಳಜಿ ವಹಿಸಿ. ಯಾವುದೇ ಹೊಸ ಒಪ್ಪಂದ ಮಾಡುವುದು ಇಂದಿನ ಮಟ್ಟಿಗೆ ಬೇಡ. ಆತುರದಲ್ಲಿ ಯಾವ ತಿರ್ಮಾನಗಳನ್ನೂ ತೆಗೆದುಕೊಳ್ಳಬೇಡಿ. ಕೌಟುಂಬಿಕವಾಗಿ ಮಿಶ್ರ ಫಲ.
ಅದೃಷ್ಟ ಸಂಖ್ಯೆ: 8

Horoscope Today

ಕಟಕ: ಬಿಡುವಿಲ್ಲದ ಕಾರ್ಯ ಯೋಜನೆ, ಅಪಾರ ಯಶಸ್ಸನ್ನು ಹಾಗೂ ಕೀರ್ತಿಯನ್ನು ತಂದು ಕೊಡುವುದು. ಪ್ರಯಾಣದ ಕುರಿತಾಗಿ ಯೋಚಿಸುವಿರಿ. ಹೂಡಿಕೆ ವ್ಯವಹಾರ ಇಂದು ಹೆಚ್ಚು ಲಾಭ ತರುವುದು. ಪರಿಪೂರ್ಣ ಆರೋಗ್ಯ. ಕೌಟುಂಬಿಕವಾಗಿ ಶುಭ ಫಲ.
ಅದೃಷ್ಟ ಸಂಖ್ಯೆ: 2

Horoscope Today

ಸಿಂಹ: ದಿನದ ಮಟ್ಟಿಗೆ ಆರೋಗ್ಯದಲ್ಲಿ ವ್ಯತ್ಯಾಸ ಆಗುವ ಸಾಧ್ಯತೆ, ಎಚ್ಚರಿಕೆ ಇರಲಿ. ವಿಶ್ವಾಸದಿಂದ ಕಾರ್ಯ ಸಿದ್ಧಿ. ಲಾಭದ ಹೂಡಿಕೆ ಕುರಿತಾಗಿ ಆಲೋಚನೆ ಮಾಡುವಿರಿ. ಕುಟುಂಬದ ಜೊತೆಗೆ ಕಾಲ ಕಳೆಯಲು ಹೆಚ್ಚು ಸಮಯ ವಿನಿಯೋಗಿಸುವ ಸಾಧ್ಯತೆ. ಕೌಟುಂಬಿಕವಾಗಿ ಮಿಶ್ರ ಫಲ.
ಅದೃಷ್ಟ ಸಂಖ್ಯೆ: 9

Horoscope Today

ಕನ್ಯಾ: ಯಾವುದೇ ಪ್ರಯತ್ನದಲ್ಲಿ ಯಶಸ್ಸು ಸಿಗಲಿದೆ. ಹಣಕಾಸು ವ್ಯವಹಾರದಲ್ಲಿ ಲಾಭ. ಆತುರದಲ್ಲಿ ಮಾತನಾಡಿ ಅಪಾಯ ತಂದುಕೊಳ್ಳುವುದು ಬೇಡ. ಸಮಸ್ಯೆಗಳು ಪರಿಹಾರವಾಗುವ ಸಾಧ್ಯತೆ. ವಿವಾಹ ಆಕಾಂಕ್ಷಿಗಳಿಗೆ ಶುಭ ಸುದ್ದಿ ಸಿಗುವ ಸಾಧ್ಯತೆ. ಉದ್ಯೋಗದಲ್ಲಿ ಪ್ರಗತಿ. ಕೌಟುಂಬಿಕವಾಗಿ ಶುಭ ಫಲ.
ಅದೃಷ್ಟ ಸಂಖ್ಯೆ: 8

ಭವಿಷ್ಯ ಮತ್ತು ಜ್ಯೋತಿಷ್ಯಕ್ಕೆ ಸಂಬಂಧಿಸಿದ ಲೇಖನ/ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್‌ (Click Here) ಮಾಡಿ

Horoscope Today

ತುಲಾ: ಭರವಸೆಯ ಹೊಸ ಅವಕಾಶಗಳು ಹುಡುಕಿಕೊಂಡು ಬರಲಿವೆ. ಸೌಂದರ್ಯದ ಕುರಿತು ಕಾಳಜಿ ವಹಿಸುವಿರಿ. ಆರೋಗ್ಯ ಪರಿಪೂರ್ಣ. ಹಣಕಾಸು ವ್ಯವಹಾರದಲ್ಲಿ ಲಾಭ. ಕುಟುಂಬದ ಸದಸ್ಯರಿಂದ ಬೆಂಬಲ ಸಿಗಲಿದೆ. ಕೌಟುಂಬಿಕವಾಗಿ ಶುಭ ಫಲ.
ಅದೃಷ್ಟ ಸಂಖ್ಯೆ: 1

Horoscope Today

ವೃಶ್ಚಿಕ: ಮಾನಸಿಕ ಒತ್ತಡದಿಂದ ದೂರವಾಗಲು ಧ್ಯಾನ ಮಾಡಿ. ವೃತಾ ಚಿಂತೆ ಮತ್ತಷ್ಟು ಖಿನ್ನತೆಗೆ ಜಾರಬೇಡಿ. ಸಾಧ್ಯವಾದಷ್ಟು ನಿಮ್ಮ ಯೋಚನೆಗಳು ಸಕಾರಾತ್ಮಕವಾಗಿರಲಿ. ಕೌಟುಂಬಿಕ ಕಲಹದಲ್ಲಿ ಧ್ವನಿ ಸೇರಿಸುವುದು ಬೇಡ, ಮನೆಯ ವಾತಾವರಣ ಹದಗೆಡಬಹುದು. ಮೌನದಿಂದ ಕಾರ್ಯ ಸಿದ್ಧಿಸಿಕೊಳ್ಳಿ. ಕೌಟುಂಬಿಕವಾಗಿ ಮಿಶ್ರ ಫಲ.
ಅದೃಷ್ಟ ಸಂಖ್ಯೆ: 3

Horoscope Today

ಧನಸ್ಸು: ಪ್ರಭಾವಿ ವ್ಯಕ್ತಿಗಳ ವಿಶ್ವಾಸದಿಂದ ಕಾರ್ಯದಲ್ಲಿ ಯಶಸ್ಸು ಸಿಗಲಿದೆ. ಅನಿರೀಕ್ಷಿತ ಖರ್ಚು, ಇದರ ಹೊರಾತಾಗಿಯೂ ಲಾಭ ಪಡೆಯುವಿರಿ. ಮಾತಿನ ಮೇಲೆ ಹಿಡಿತವಿರಲಿ. ಸಮಯ ವ್ಯರ್ಥ ಮಾಡದೆ ಕಾರ್ಯದಲ್ಲಿ ಮುನ್ನುಗ್ಗಿ. ಕೌಟುಂಬಿಕವಾಗಿ ಶುಭ ಫಲ.
ಅದೃಷ್ಟ ಸಂಖ್ಯೆ: 9

Horoscope Today

ಮಕರ: ಘಟಿಸಿದ ಘಟನೆಗಳನ್ನು ಮೆಲುಕು ಹಾಕುತ್ತಾ ಕಾಲಹರಣ ಮಾಡುವ ಬದಲು ಕಾರ್ಯದಲ್ಲಿ ಮುನ್ನುಗ್ಗಿ. ಮಾನಸಿಕ ಒತ್ತಡ ನಿಮ್ಮ ಆರೋಗ್ಯದ ಮೇಲೆ ಪರಿಣಾಮ ಬೀರಬಹುದು. ಸಾಧ್ಯವಾದಷ್ಟು ವಿಶ್ರಾಂತಿ ಪಡೆಯಿರಿ. ಉದ್ಯೋಗದ ಸ್ಥಳದಲ್ಲಿ ಕಿರಿಕಿರಿ ಉಂಟಾಗುವ ಸಾಧ್ಯತೆ. ಯಾರೊಂದಿಗೂ ಕೋಪದಿಂದ ಮಾತನಾಡುವುದು ಬೇಡ. ಆರ್ಥಿಕ ಪ್ರಗತಿ. ಕೌಟುಂಬಿಕವಾಗಿ ಸಾಧಾರಣ ಫಲ.
ಅದೃಷ್ಟ ಸಂಖ್ಯೆ: 9

ಶನಿ ಸಂಚಾರ ಯಾವ ರಾಶಿಗೆ ಕಷ್ಟ, ಯಾವ ರಾಶಿಗೆ ನಷ್ಟ? ತಿಳಿಯಲು ಈ ವಿಡಿಯೋ ನೋಡಿ.
Horoscope Today

ಕುಂಭ: ನಿಮ್ಮ ಸಹಾಯ ಮಾಡುವ ಗುಣ, ಇತರರಿಂದ ಪ್ರಶಂಸೆಗೆ ಪಾತ್ರವಾಗಲಿದೆ. ವ್ಯಾಪಾರ ವ್ಯವಹಾರದಲ್ಲಿ ಪ್ರಗತಿ. ಕುಟುಂಬದ ಸದಸ್ಯರ ಬೆಂಬಲ ಸಿಗಲಿದೆ. ಆರೋಗ್ಯ ಉತ್ತಮ. ಉದ್ಯೋಗದಲ್ಲಿ ನೀವಿಂದು ಹಿಡಿದ ಕಾರ್ಯವನ್ನು ಪೂರ್ಣಗೊಳಿಸುವಿರಿ. ಕೌಟುಂಬಿಕವಾಗಿ ಶುಭ ಫಲ.
ಅದೃಷ್ಟ ಸಂಖ್ಯೆ: 7

Horoscope Today

ಮೀನ: ಉದ್ಯೋಗದಲ್ಲಿ ಹೊಸ ಭರವಸೆ ಮೂಡಲಿದೆ. ಅರೋಗ್ಯ ಪರಿಪೂರ್ಣ. ಹಣಕಾಸು ವ್ಯವಹಾರದಲ್ಲಿ ಪ್ರಗತಿ. ಕುಟುಂಬದ ಸದಸ್ಯರ ವರ್ತನೆ ಮುಜುಗರ ಉಂಟು ಮಾಡುವ ಸಾಧ್ಯತೆ. ಕೌಟುಂಬಿಕವಾಗಿ ಮಿಶ್ರ ಫಲ.
ಅದೃಷ್ಟ ಸಂಖ್ಯೆ: 4

Horoscope Today

ವಿದ್ವಾನ್ ಶ್ರೀ ನವೀನಶಾಸ್ತ್ರಿ ರಾ. ಪುರಾಣಿಕ
ಖ್ಯಾತ ಜ್ಯೋತಿಷಿ ಹಾಗೂ ಉಪನ್ಯಾಸಕರು

M: 9481854580 | pnaveenshastri@gmail.com

ಇದನ್ನೂ ಓದಿ : Vastu Tips : ಮನೆಯಲ್ಲಿ ಕುಡಿಯುವ ನೀರಿನ ಫಿಲ್ಟರನ್ನು ಈ ದಿಕ್ಕಿನಲ್ಲಿಟ್ಟರೆ ಬಹಳ ಒಳ್ಳೆಯದು!

ಕ್ಷಣ ಕ್ಷಣದ ಮಾಹಿತಿಗಾಗಿ Vistara News FaceBook ಪೇಜ್ ಫಾಲೋ ಮಾಡಿ
ಮಹತ್ವದ ಮಾಹಿತಿಗಾಗಿ ವಿಸ್ತಾರ ನ್ಯೂಸ್ ಆ್ಯಪ್ ಉಚಿತವಾಗಿ ಡೌನ್ ಲೋಡ್ ಮಾಡಿಕೊಳ್ಳಿ: Andriod App | IOS App
Continue Reading
Click to comment

Leave a Reply

Your email address will not be published. Required fields are marked *

ಪ್ರಮುಖ ಸುದ್ದಿ

ಅಧಿಕಾರಕ್ಕೆ ಬಂದ್ರೆ ನಿಮ್ಮ ಖಾತೆಗೆ ಟಕಾಟಕ್ 1 ಲಕ್ಷ ಎಂದಿದ್ದ ರಾಹುಲ್ ಗಾಂಧಿ! ಪೋಸ್ಟ್ ಆಫೀಸ್ ಮುಂದೆ ಮುಸ್ಲಿಂ ಮಹಿಳೆಯರ ನೂಕುನುಗ್ಗಲು!!

ಲೋಕಸಭೆ ಚುನಾವಣೆ (Lok Sabha Election 2024) ಪ್ರಚಾರದಲ್ಲಿ ರಾಹುಲ್‌ ಗಾಂಧಿ, ಇಂಡಿಯಾ ಒಕ್ಕೂಟ ಅಧಿಕಾರಕ್ಕೆ ಬಂದ ಕೂಡಲೇ ನಿಮ್ಮ ಖಾತೆಗೆ ಹಣ ಜಮಾವಣೆ ಮಾಡುವುದಾಗಿ ಘೋಷಣೆ ಮಾಡಿದ್ದರು. ಈ ಘೋಷಣೆಯ ಬೆನ್ನಲ್ಲೇ ಇಂಡಿಯನ್ ಪೋಸ್ಟ್ ಪೇಮೆಂಟ್ಸ್ ಬ್ಯಾಂಕ್ ಡಿಜಿಟಲ್ ಖಾತೆ (post payments Bank digital account) ತೆರೆಯಲು ಮಹಿಳೆಯರು ಮುಗಿಬಿದ್ದಿದ್ದಾರೆ.

VISTARANEWS.COM


on

ರಾಹುಲ್‌ ಗಾಂಧಿ rahul gandhi ippb account 2
Koo

ವಿಶೇಷ ವರದಿ: ಅಭಿಷೇಕ್ ಬಿ.ವಿ, ವಿಸ್ತಾರ ನ್ಯೂಸ್

ಬೆಂಗಳೂರು: ಇಂಡಿಯಾ ಮೈತ್ರಿಕೂಟ (INDIA bloc) ಅಧಿಕಾರಕ್ಕೆ ಬಂದ ನಂತರದ ದಿನವೇ ಮಹಿಳೆಯರ (women) ಖಾತೆಗೆ ʼಟಕಾ ಟಕ್ ಹಣʼ ಜಮಾವಣೆ ಮಾಡಲಾಗುವುದು ಎಂಬ ಕಾಂಗ್ರೆಸ್‌ ನಾಯಕ ರಾಹುಲ್‌ ಗಾಂಧಿ (Rahul Gandhi) ಘೋಷಣೆ ಪರಿಣಾಮ, ಪೋಸ್ಟ್‌ ಆಫೀಸ್‌ಗಳಲ್ಲಿ (Post Office) ಖಾತೆ ತೆರೆಯಲು ಮುಸ್ಲಿಂ ಮಹಿಳೆಯರು (Muslim Women) ಮುಗಿಬಿದ್ದಿದ್ದಾರೆ.

ಲೋಕಸಭೆ ಚುನಾವಣೆ (Lok Sabha Election 2024) ಪ್ರಚಾರದಲ್ಲಿ ಇಂಡಿಯಾ ಒಕ್ಕೂಟ, ಅಧಿಕಾರ ಬಂದ ಕೂಡಲೇ ಸರ್ಕಾರ ನಿಮ್ಮ ಖಾತೆಗೆ ಹಣ ಜಮಾವಣೆ ಮಾಡುವುದಾಗಿ ಘೋಷಣೆ ಮಾಡಿತ್ತು. ಈ ಘೋಷಣೆಯ ಬೆನ್ನಲ್ಲೇ ಇಂಡಿಯನ್ ಪೋಸ್ಟ್ ಪೇಮೆಂಟ್ಸ್ ಬ್ಯಾಂಕ್ ಡಿಜಿಟಲ್ ಖಾತೆ (post payments Bank digital account) ತೆರೆಯಲು ಮಹಿಳೆಯರು ಮುಗಿಬಿದ್ದಿದ್ದಾರೆ. ಪ್ರತಿ ತಿಂಗಳು 8500 ರೂ. ಹಣ ಬರಲಿದೆ ಎಂಬ ನಿರೀಕ್ಷೆಯಲ್ಲಿ ಪೋಸ್ಟ್ ಆಫೀಸ್ ಮುಂದೆ ಕ್ಯೂ ನಿಲ್ಲುತ್ತಿದ್ದಾರೆ.

ಕಳೆದ 15 ದಿನದಿಂದ ನಿತ್ಯ ಸಾವಿರಾರು ಸಂಖ್ಯೆಯಲ್ಲಿ ಖಾತೆ ತೆರೆಯಲು ಮಹಿಳೆಯರು ಮುಗಿಬೀಳುತ್ತಿರುವುದು ಕಂಡುಬಂದಿದೆ. ಮಹಿಳೆಯರ ನಿಯಂತ್ರಣ ಮಾಡಲಾರದೆ ಬೆಂಗಳೂರಿನ ಅಂಚೆ ಕೇಂದ್ರ ಕಚೇರಿಯ ಸಿಬ್ಬಂದಿ ಹೈರಾಣಾಗುತ್ತಿದ್ದಾರೆ. ನಿತ್ಯ ಬೆಳಗ್ಗೆ 4 ಗಂಟೆಯಿಂದಲೇ ಕಚೇರಿ ಮುಂದೆ ಮುಗಿಬೀಳುತ್ತಿರುವ ಸುತ್ತಮುತ್ತಲಿನ ಶಿವಾಜಿನಗರ, ವಸಂತನಗರ ಮುಂತಾದೆಡೆಗಳ ಮುಸ್ಲಿಂ ಮಹಿಳೆಯರು, ಅವರ ಜೊತೆಗೆ ಬರುತ್ತಿರುವ ಪುರುಷರು ಅಂಚೆ ಕಚೇರಿ ಆವರಣವನ್ನು ಅಕ್ಷರಶಃ ಸಂತೆಯಾಗಿಸಿದ್ದಾರೆ.

ಮಹಿಳೆಯರ ನಿಯಂತ್ರಣ ಸಾಧ್ಯವಾಗದೆ ಅಂಚೆ ಸಿಬ್ಬಂದಿ ಟೋಕ‌ನ್ ವಿತರಿಸಲು ಆರಂಭಿಸಿದ್ದಾರೆ. ಬೆಳಗ್ಗೆ 4 ಗಂಟೆಗೆ ಟೋಕನ್ ವಿತರಣೆ ಆರಂಭವಾಗುತ್ತಿದೆ. ಸಾವಿರಾರು ಸಂಖ್ಯೆಯಲ್ಲಿ ಕ್ಯೂ ನಿಂತು ಮಹಿಳೆಯರು ಟೋಕನ್ ಪಡೆಯುತ್ತಿದ್ದಾರೆ.

ಖಾತೆ ತೆರೆಯುತ್ತಿರುವ ಮಹಿಳೆಯರಿಗೂ ಹಣ ಬರುವ ಬಗ್ಗೆ ಖಚಿತ ಮಾಹಿತಿ ಇಲ್ಲ! “ಅಕೌಂಟ್‌ಗೆ ಹಣ ಬರುತ್ತೆ ಅಂತ ಅಕ್ಕಪಕ್ಕದವರು ಹೇಳಿದರು. ಕಾಂಗ್ರೆಸ್ ಅಧಿಕಾರಕ್ಕೆ ಬಂದರೆ ಒಂದು ಲಕ್ಷ ಹಣ ನೀಡುತ್ತಾರಂತೆ. ಮೋದಿ ಬಂದ್ರೆ 2 ಸಾವಿರ ನೀಡುತ್ತಾರಂತೆ. ಯಾರು ಬಂದ್ರೇನು ನಮಗೆ ಹಣ ಬರುತ್ತೆ ಅಂತ ಹೇಳಿದ್ರು. ಅದಕ್ಕೆ ಬಂದಿದ್ದೇವೆ. ಬೆಳಗ್ಗೆ 5 ಗಂಟೆಗೆ ಬಂದಿದ್ದೇವೆ. ಯಾವ ಅಧಿಕಾರಿಗಳೂ ಹೇಳಿಲ್ಲ, ನೆರೆಮನೆಯವರು, ಸ್ಥಳೀಯರು ಹೇಳಿದರು” ಎಂಬುದು ಖಾತೆಗಾಗಿ ಕ್ಯೂ ನಿಂತ ಮಹಿಳೆಯರ ಹೇಳಿಕೆ.

ಹೆಡ್‌ ಪೋಸ್ಟ್‌ ಮಾಸ್ಟರ್‌ ಹೇಳೋದೇನು?

“ನಮ್ಮಲ್ಲಿ ಮೊದಲಿನಿಂದಲೂ IPPB ಖಾತೆ ಮಾಡುತ್ತಿದ್ದೇವೆ. ಆದರೆ ಕೆಲ ದಿನಗಳಿಂದ ಜನರ ಸಂಖ್ಯೆ ಸಿಕ್ಕಾಪಟ್ಟೆ ಹೆಚ್ಚಾಗಿದೆ. ಅಕೌಂಟ್‌ಗೆ ಹಣ ಹಾಕ್ತಾರೆ ಅಂತ ಜನ ಬರುತ್ತಿದ್ದಾರೆ. ಹಣ ಬರುವ ಬಗ್ಗೆ ನಮಗೆ ಯಾವುದೇ ಸೂಚನೆ ಇಲ್ಲ. ಆದರೆ ವದಂತಿ ಹರಡಿ ಜನರು ಜಾಸ್ತಿ ಜಾಸ್ತಿ ಬರ್ತಿದ್ದಾರೆ” ಎಂದು ಹೆಡ್ ಪೋಸ್ಟ್ ಮಾಸ್ಟರ್ ಮಂಜೇಶ್ ಹೇಳಿದ್ದಾರೆ.

“ಈ ಖಾತೆಯಿಂದ ಬೇರೆ ಬೇರೆ ಪ್ರಾಧಿಕಾರಗಳಿಗೆ ಹಣ ಕಟ್ಟಬಹುದು. 200 ರೂ. ಮಾತ್ರ ಜಮಾ ಮಾಡಿಸಿ ಖಾತೆ ತೆರೆಯುತ್ತಿದ್ದೇವೆ. ಜನರು ಹೆಚ್ಚಾಗಿದ್ದರಿಂದ ಈಗ ಹೆಚ್ಚಿನ ಸಿಬ್ಬಂದಿ ನೇಮಿಸಿದ್ದೇವೆ. ನಿತ್ಯ 1 ಸಾವಿರ ಅಕೌಂಟ್ ಮಾಡಿ ಕೊಡ್ತಿದ್ದೇವೆ. ಜನರಿಗೆ ಮಾಹಿತಿ ಕೊರತೆ ಇರೋದರಿಂದ ಮುಗಿಬೀಳ್ತಿದ್ದಾರೆ. ಇದಕ್ಕೆ ಯಾವುದೇ ಕೊನೆ ದಿನಾಂಕ ಇಲ್ಲ. ಯಾವ ಅಂಚೆ ಕಚೇರಿಯಲ್ಲಾದರೂ ಅಕೌಂಟ್ ಮಾಡಿಸಬಹುದು” ಎಂದು ಹೆಡ್ ಪೋಸ್ಟ್ ಮಾಸ್ಟರ್ ಮಂಜೇಶ್ ಸ್ಪಷ್ಟನೆ ನೀಡಿದ್ದಾರೆ.

ಇದನ್ನೂ ಓದಿ: Rahul Gandhi: ನೋಡ ನೋಡ್ತಿದ್ದಂತೆ ತಲೆ ಮೇಲೆ ನೀರು ಸುರಿದುಕೊಂಡ ರಾಹುಲ್‌ ಗಾಂಧಿ! ವಿಡಿಯೋ ಇದೆ

Continue Reading

ಪ್ರಮುಖ ಸುದ್ದಿ

DK Shivakumar: ಕುತೂಹಲ ಕೆರಳಿಸಿದ ಡಿಕೆಶಿ- ಉಪರಾಷ್ಟ್ರಪತಿ ಭೇಟಿ; ʼಬಿಜೆಪಿಗೆ ಸೇರ್ತೀರಾʼ ಎಂದ ನೆಟ್ಟಿಗರು!

DK Shivakumar: ಪಕ್ಷದ ವಿಧಾನ ಪರಿಷತ್‌ ಅಭ್ಯರ್ಥಿ ಆಯ್ಕೆ ಮಾಡುವ ಸಂಬಂಧ ಸಿಎಂ ಸಿದ್ದರಾಮಯ್ಯ ಹಾಗೂ ಡಿಸಿಎಂ ಸರಣಿ ಸಭೆಗಳನ್ನು ನಡೆಸಲು ದಿಲ್ಲಿಗೆ ಆಗಮಿಸಿದ್ದಾರೆ. ಇಂದು ಮುಂಜಾನೆ ಉಪರಾಷ್ಟ್ರಪತಿಗಳಿಂದ ಡಿಸಿಎಂ ಡಿ.ಕೆ ಶಿವಕುಮಾರ್ ಅವರಿಗೆ ಬ್ರೇಕ್ ಫಾಸ್ಟ್‌ಗೆ ಆಹ್ವಾನ ಬಂದಿತ್ತು.

VISTARANEWS.COM


on

dk shivakumar jagdeep dhankar
Koo

ಹೊಸದಿಲ್ಲಿ: ದೆಹಲಿ ಪ್ರವಾಸದಲ್ಲಿರುವ ಉಪಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ (DCM DK Shivakumar) ಅವರು ಉಪ ರಾಷ್ಟ್ರಪತಿ ಜಗದೀಪ್ ಧನ್ಕರ್ (Vice President Jagdeep Dhankar) ಅವರನ್ನು ಕರ್ನಾಟಕ ಭವನದಲ್ಲಿ ಮಂಗಳವಾರ ಭೇಟಿ ಮಾಡಿ ಸಮಾಲೋಚನೆ ನಡೆಸಿದರು. ಈ ಭೇಟಿ ಇದೀಗ ಕುತೂಹಲ ಕೆರಳಿಸಿದೆ.

ಇಂದು ಮುಂಜಾನೆ ಉಪರಾಷ್ಟ್ರಪತಿಗಳಿಂದ ಡಿಸಿಎಂ ಡಿ.ಕೆ ಶಿವಕುಮಾರ್ ಅವರಿಗೆ ಬ್ರೇಕ್ ಫಾಸ್ಟ್‌ಗೆ ಆಹ್ವಾನ ಬಂದಿತ್ತು. ಉಪರಾಷ್ಟ್ರಪತಿಗಳನ್ನು ಭೇಟಿಯಾದ ಚಿತ್ರವನ್ನು ನಂತರ ಫೇಸ್‌ಬುಕ್‌ನಲ್ಲಿ ಹಂಚಿಕೊಂಡ ಡಿಕೆಶಿ, “ಗೌರವಾನ್ವಿತ ಉಪರಾಷ್ಟ್ರಪತಿಗಳಾದ ಶ್ರೀ ಜಗದೀಪ್‌ ಧನಕರ್‌ ಅವರನ್ನು ಇಂದು ರಾಜಭವನದಲ್ಲಿ ಸೌಹಾರ್ದಯುತವಾಗಿ ಭೇಟಿಯಾದೆ. ಈ ವೇಳೆ ಪ್ರಾದೇಶಿಕ ಹಾಗೂ ರಾಷ್ಟ್ರೀಯ ವಿಚಾರಗಳ ಕುರಿತು ಪರಸ್ಪರ ಚರ್ಚಿಸಿದೆವು” ಎಂದು ಬರೆದುಕೊಂಡಿದ್ದಾರೆ.

ಇದಕ್ಕೆ ನೆಟ್ಟಿಗರಿಂದ ವಿಧವಿಧವಾದ ಪ್ರತಿಕ್ರಿಯೆಗಳು ಕಂಡುಬಂದವು. “ಶುಭವಾಗಲಿ ನಿಮಗೆ. ಆದಷ್ಟೂ ಶೀಘ್ರ ಬಿಜೆಪಿಗೆ ನೀವು ಬರುವಂತಾಗಲಿ. ನಂತರ, ರಾಜ್ಯದ ಮುಖ್ಯಮಂತ್ರಿ ಆಗಲಿ ಎಂದು ಆಶಿಸುತ್ತೇನೆ” ಎಂದು ಒಬ್ಬರು ಕಾಮೆಂಟ್‌ ಮಾಡಿದ್ದಾರೆ. “ಇದೆಲ್ಲ ಬೇಡ ನಮಗೆ ಸಿಎಂ ಆಗಬೇಕು” ಎಂದು ಮತ್ತೊಬ್ಬರು ಬರೆದಿದ್ದಾರೆ.

ಪಕ್ಷದ ವಿಧಾನ ಪರಿಷತ್‌ ಅಭ್ಯರ್ಥಿ ಆಯ್ಕೆ ಮಾಡುವ ಸಂಬಂಧ ಸಿಎಂ ಸಿದ್ದರಾಮಯ್ಯ ಹಾಗೂ ಡಿಸಿಎಂ ಸರಣಿ ಸಭೆಗಳನ್ನು ನಡೆಸಲು ದಿಲ್ಲಿಗೆ ಆಗಮಿಸಿದ್ದಾರೆ. ದೆಹಲಿಗೆ ಬರುತ್ತಿದ್ದಂತೆ ರಣದೀಪ್‌ ಸುರ್ಜೆವಾಲಾ ಜೊತೆಗೆ ಸಭೆ ನಡೆಸಿದ್ದು, ಬಳಿಕ ಕರ್ನಾಟಕ ಭವನದಲ್ಲಿ ಮತ್ತೊಂದು ಸುತ್ತಿನ ಸಭೆ ನಡೆಸಿದರು. ರಾತ್ರಿ 10 ಗಂಟೆಗೆ ಕೆ.ಸಿ ವೇಣುಗೋಪಾಲ್ ಜೊತೆ ಸಭೆ ನಡೆಸಿ ಸಿಎಂ ಹಾಗೂ ಡಿಸಿಎಂ ನಾಳೆ ಬೆಳಿಗ್ಗೆ ಖರ್ಗೆ ಜೊತೆಗೆ ಅಂತಿಮ ಸಭೆ ನಡೆಸಲಿದ್ದಾರೆ. ನಿರೀಕ್ಷೆಗೂ ಮೀರಿ ಆಕಾಂಕ್ಷಿಗಳ ಹೆಸರು ಪಟ್ಟಿಯಲ್ಲಿರುವುದರಿಂದ ಅಭ್ಯರ್ಥಿ ಆಯ್ಕೆ ಸಂಬಂಧ ಕಗ್ಗಂಟು ಬಗೆಹರಿಯದಾಗಿದೆ.

ಕೆಲವು ದಿನಗಳ ಹಿಂದೆ ಒಕ್ಕಲಿಗರ ಸಭೆಯಲ್ಲಿ ಮಾತನಾಡುತ್ತ ಡಿಕೆಶಿ, ತಾವು ಮುಂದಿನ ಸಿಎಂ (Next CM) ಆಗುವ ಬಗ್ಗೆ ಸುಳಿವನ್ನು ನೀಡಿದ್ದರು. “ಏನು ಆಗಬೇಕೆಂದಿದೆಯೋ ಅದು ದೆಹಲಿಯಲ್ಲಿ ತೀರ್ಮಾನ ಆಗಿದೆ. ಅಲ್ಲದೆ, ಸ್ವಲ್ಪ ದಿನ ಕಾಯಿರಿ” ಎಂದು ಹೇಳಿದ್ದರು. ಆ ಮೂಲಕ ಕೆಲವೇ ದಿನಗಳಲ್ಲಿ ರಾಜ್ಯ ರಾಜಕೀಯದಲ್ಲಿ ಬದಲಾವಣೆ ಆಗಲಿದೆ ಎಂಬ ಸುಳಿವನ್ನು ನೀಡಿದ್ದಾರೆ.

ಇದನ್ನೂ ಓದಿ: ವಿಧಾನ ಪರಿಷತ್‌ ಚುನಾವಣೆ: ಖರ್ಗೆ, ಸಿದ್ದು, ಡಿಕೆಶಿ ಆಪ್ತರಿಗೆ ಸ್ಥಾನ ಕೊಡಿಸಲು 2+2+2+1=7 ಫಾರ್ಮುಲಾ; ಏನಿದು?

Continue Reading

ಉದ್ಯೋಗ

Job Alert: ಯುಪಿಎಸ್‌ಸಿಯಿಂದ 312 ಹುದ್ದೆ ಭರ್ತಿಗೆ ಅರ್ಜಿ ಆಹ್ವಾನ; ಆನ್‌ಲೈನ್‌ ಮೂಲಕ ಅಪ್ಲೈ ಮಾಡಿ

Job Alert: ಯೂನಿಯನ್‌ ಪಬ್ಲಿಕ್‌ ಸರ್ವಿಸ್‌ ಕಮಿಷನ್‌ (UPSC) ಖಾಲಿ ಇರುವ ವಿವಿಧ ಹುದ್ದೆಗಳ ಭರ್ತಿಗೆ ಅರ್ಜಿ ಆಹ್ವಾನಿಸಿದೆ. ಅಸಿಸ್ಟಂಟ್ ಪ್ರೊಫೆಸರ್, ಟ್ರೈನಿಂಗ್ ಆಫೀಸರ್, ಎಂಜಿನಿಯರ್ ಮತ್ತು ಶಿಪ್ ಸರ್ವೇಯರ್ ಕಮ್ ಡೆಪ್ಯೂಟಿ ಡೈರೆಕ್ಟರ್ ಜನರಲ್ ಸೇರಿ ಸುಮಾರು 312 ಹುದ್ದೆಗಳಿವೆ. ಆಸಕ್ತರು ಆನ್‌ಲೈನ್‌ ಮೂಲಕ ಅರ್ಜಿ ಸಲ್ಲಿಸಬೇಕಿದ್ದು, ಕೊನೆಯ ದಿನಾಂಕ ಜೂನ್‌ 13.

VISTARANEWS.COM


on

Job Alert
Koo

ನವದೆಹಲಿ: ಯೂನಿಯನ್‌ ಪಬ್ಲಿಕ್‌ ಸರ್ವಿಸ್‌ ಕಮಿಷನ್‌ (UPSC) ಖಾಲಿ ಇರುವ ವಿವಿಧ ಹುದ್ದೆಗಳ ಭರ್ತಿಗೆ ಅರ್ಜಿ ಆಹ್ವಾನಿಸಿದೆ. ಅಸಿಸ್ಟಂಟ್ ಪ್ರೊಫೆಸರ್, ಟ್ರೈನಿಂಗ್ ಆಫೀಸರ್, ಎಂಜಿನಿಯರ್ ಮತ್ತು ಶಿಪ್ ಸರ್ವೇಯರ್ ಕಮ್ ಡೆಪ್ಯೂಟಿ ಡೈರೆಕ್ಟರ್ ಜನರಲ್ ಸೇರಿ ಸುಮಾರು 312 ಹುದ್ದೆಗಳಿವೆ (UPSC Specialist Grade III, Assistant Director Grade-II & Other Recruitment 2024). ಪದವಿ, ಡಿಪ್ಲೋಮಾ ಅರ್ಹತೆ ಇರುವವರು ಅರ್ಜಿ ಸಲ್ಲಿಸಬಹುದು. ಆಸಕ್ತರು ಆನ್‌ಲೈನ್‌ ಮೂಲಕ ಅರ್ಜಿ ಸಲ್ಲಿಸಬೇಕಿದ್ದು, ಕೊನೆಯ ದಿನಾಂಕ ಜೂನ್‌ 13. ಅಪ್ಲಿಕೇಶನ್‌ ಪ್ರಿಂಟ್ ತೆಗೆದುಕೊಳ್ಳಲು ಕೊನೆಯ ದಿನಾಂಕ ಜೂನ್‌ 14 (Job Alert).

ಹುದ್ದೆಗಳ ವಿವರ ಮತ್ತು ವಿದ್ಯಾರ್ಹತೆ

ಉಪ ಅಧೀಕ್ಷಕ ಪುರಾತತ್ವ ರಸಾಯನ ಶಾಸ್ತ್ರಜ್ಞ – 4 ಹುದ್ದೆ, ವಿದ್ಯಾರ್ಹತೆ- ಪದವಿ / ಸ್ನಾತಕೋತ್ತರ ಪದವಿ (ರಸಾಯನ ಶಾಸ್ತ್ರ)
ಉಪ ಅಧೀಕ್ಷಕ ಪುರಾತತ್ವ ಶಾಸ್ತ್ರಜ್ಞ – 67 ಹುದ್ದೆ, ವಿದ್ಯಾರ್ಹತೆ- ಪಿಜಿ (ಪುರಾತತ್ವಶಾಸ್ತ್ರ / ಭಾರತೀಯ ಇತಿಹಾಸ)
ಸಿವಿಲ್ ಹೈಡ್ರೋಗ್ರಾಫಿಕ್ ಆಫೀಸರ್, ಇಂಟಿಗ್ರೇಟೆಡ್ ಹೆಡ್‌ಕ್ವಾರ್ಟಸ್‌ (ನೌಕಾಪಡೆ) – 4 ಹುದ್ದೆ, ವಿದ್ಯಾರ್ಹತೆ: ಪದವಿ / ಪಿಜಿ (ಸಂಬಂಧಿತ ಎಂಜಿನಿಯರಿಂಗ್)
ಸ್ಪೆಷಲಿಸ್ಟ್ ಗ್ರೇಡ್ 3 ಅಸಿಸ್ಟೆಂಟ್ ಪ್ರೊಫೆಸರ್ (ಫೋರೆನ್ಸಿಕ್ ಮೆಡಿಸಿನ್) – 6 ಹುದ್ದೆ, ವಿದ್ಯಾರ್ಹತೆ: ಎಂಬಿಬಿಎಸ್
ಸ್ಪೆಷಲಿಸ್ಟ್ ಗ್ರೇಡ್ 3 ಅಸಿಸ್ಟೆಂಟ್ ಪ್ರೊಫೆಸರ್ (ಜನರಲ್ ಮೆಡಿಸಿನ್) – 61 ಹುದ್ದೆ, ವಿದ್ಯಾರ್ಹತೆ: ಎಂಬಿಬಿಎಸ್ / ಪಿಜಿ (ಸಂಬಂಧಪಟ್ಟ ವಿಷಯಗಳಲ್ಲಿ)
ಸ್ಪೆಷಲಿಸ್ಟ್ ಗ್ರೇಡ್ 3 ಅಸಿಸ್ಟೆಂಟ್ ಪ್ರೊಫೆಸರ್ (ಜನರಲ್ ಸರ್ಜರಿ) – 39 ಹುದ್ದೆ, ವಿದ್ಯಾರ್ಹತೆ: ಎಂಬಿಬಿಎಸ್ / ಪಿಜಿ (ಸಂಬಂಧಪಟ್ಟ ವಿಷಯಗಳಲ್ಲಿ)
ಸ್ಪೆಷಲಿಸ್ಟ್ ಗ್ರೇಡ್ 3 ಅಸಿಸ್ಟೆಂಟ್ ಪ್ರೊಫೆಸರ್ (ಪೀಡಿಯಾಟ್ರಿಕ್ ನೆಫ್ರಾಲಜಿ) 3 ಹುದ್ದೆ, ವಿದ್ಯಾರ್ಹತೆ: ಎಂಬಿಬಿಎಸ್ / ಪಿಜಿ (ಸಂಬಂಧಪಟ್ಟ ವಿಷಯಗಳಲ್ಲಿ)
ಸ್ಪೆಷಲಿಸ್ಟ್ ಗ್ರೇಡ್ 3 ಅಸಿಸ್ಟೆಂಟ್ ಪ್ರೊಫೆಸರ್ (ಪೀಡಿಯಾಟ್ರಿಕ್ಸ್) – 23 ಹುದ್ದೆ, ವಿದ್ಯಾರ್ಹತೆ: ಎಂಬಿಬಿಎಸ್ / ಪಿಜಿ (ಸಂಬಂಧಪಟ್ಟ ವಿಷಯಗಳಲ್ಲಿ)
ಸ್ಪೆಷಲಿಸ್ಟ್ ಗ್ರೇಡ್-3 (ಅನಸ್ತೇಶಿಯಾಲಜಿ) – 2 ಹುದ್ದೆ, ವಿದ್ಯಾರ್ಹತೆ: ಎಂಬಿಬಿಎಸ್ / ಪಿಜಿ ಡಿಪ್ಲೊಮಾ / ಪಿಜಿ (ಸಂಬಂಧಪಟ್ಟ ಸ್ಪೆಷಾಲಿಟಿ)
ಸ್ಪೆಷಲಿಸ್ಟ್ ಗ್ರೇಡ್-3 (ಡರ್ಮಟಾಲಜಿ, ವೆನೆರಿಯಾಲಜಿ ಮತ್ತು ಕುಷ್ಠರೋಗ) – 2 ಹುದ್ದೆ, ವಿದ್ಯಾರ್ಹತೆ: ಎಂಬಿಬಿಎಸ್ / ಪಿಜಿ ಡಿಪ್ಲೊಮಾ / ಪಿಜಿ (ಸಂಬಂಧಪಟ್ಟ ಸ್ಪೆಷಾಲಿಟಿ)
ಸ್ಪೆಷಲಿಸ್ಟ್ ಗ್ರೇಡ್-3 (ಜನರಲ್ ಮೆಡಿಸಿನ್) – 4 ಹುದ್ದೆ, ವಿದ್ಯಾರ್ಹತೆ: ಎಂಬಿಬಿಎಸ್ / ಪಿಜಿ ಡಿಪ್ಲೊಮಾ / ಪಿಜಿ (ಸಂಬಂಧಪಟ್ಟ ಸ್ಪೆಷಾಲಿಟಿ)
ಸ್ಪೆಷಲಿಸ್ಟ್ ಗ್ರೇಡ್-3 (ಜನರಲ್ ಸರ್ಜರಿ) – 7 ಹುದ್ದೆ, ವಿದ್ಯಾರ್ಹತೆ: ಎಂಬಿಬಿಎಸ್ / ಪಿಜಿ ಡಿಪ್ಲೊಮಾ / ಪಿಜಿ (ಸಂಬಂಧಪಟ್ಟ ಸ್ಪೆಷಾಲಿಟಿ)
ಸ್ಪೆಷಲಿಸ್ಟ್ ಗ್ರೇಡ್-3 (ಪ್ರಸೂತಿ ಮತ್ತು ಜ್ಞಾನಶಾಸ್ತ್ರ) – 5 ಹುದ್ದೆ, ವಿದ್ಯಾರ್ಹತೆ: ಎಂಬಿಬಿಎಸ್ / ಪಿಜಿ ಡಿಪ್ಲೊಮಾ / ಪಿಜಿ (ಸಂಬಂಧಪಟ್ಟ ಸ್ಪೆಷಾಲಿಟಿ)
ಸ್ಪೆಷಲಿಸ್ಟ್ ಗ್ರೇಡ್-3 (ನೇತ್ರಶಾಸ್ತ್ರ) – 3 ಹುದ್ದೆ, ವಿದ್ಯಾರ್ಹತೆ: ಎಂಬಿಬಿಎಸ್ / ಪಿಜಿ ಡಿಪ್ಲೊಮಾ / ಪಿಜಿ (ಸಂಬಂಧಪಟ್ಟ ಸ್ಪೆಷಾಲಿಟಿ)
ಸ್ಪೆಷಲಿಸ್ಟ್ ಗ್ರೇಡ್-3 (ಆರ್ಥೋಪೆಡಿಕ್ಸ್) – 2 ಹುದ್ದೆ, ವಿದ್ಯಾರ್ಹತೆ: ಎಂಬಿಬಿಎಸ್ / ಪಿಜಿ ಡಿಪ್ಲೊಮಾ / ಪಿಜಿ (ಸಂಬಂಧಪಟ್ಟ ಸ್ಪೆಷಾಲಿಟಿ)
ಸ್ಪೆಷಲಿಸ್ಟ್ ಗ್ರೇಡ್-3 ಓಟೊ-ರೈನೋ-ಲಾರಿಂಗಲಜಿ (ಕಿವಿ, ಮೂಗು ಮತ್ತು ಗಂಟಲು) – 3 ಹುದ್ದೆ, ವಿದ್ಯಾರ್ಹತೆ: ಎಂಬಿಬಿಎಸ್ / ಪಿಜಿ ಡಿಪ್ಲೊಮಾ / ಪಿಜಿ (ಸಂಬಂಧಪಟ್ಟ ಸ್ಪೆಷಾಲಿಟಿ)
ಸ್ಪೆಷಲಿಸ್ಟ್ ಗ್ರೇಡ್-3 (ಪೀಡಿಯಾಟ್ರಿಕ್ಸ್) – 2 ಹುದ್ದೆ, ವಿದ್ಯಾರ್ಹತೆ: ಎಂಬಿಬಿಎಸ್ / ಪಿಜಿ ಡಿಪ್ಲೊಮಾ / ಪಿಜಿ (ಸಂಬಂಧಪಟ್ಟ ಸ್ಪೆಷಾಲಿಟಿ)
ಸ್ಪೆಷಲಿಸ್ಟ್ ಗ್ರೇಡ್-3 (ಪ್ಯಾಥಾಲಜಿ) – 4 ಹುದ್ದೆ, ವಿದ್ಯಾರ್ಹತೆ: ಎಂಬಿಬಿಎಸ್ / ಪಿಜಿ ಡಿಪ್ಲೊಮಾ / ಪಿಜಿ (ಸಂಬಂಧಪಟ್ಟ ಸ್ಪೆಷಾಲಿಟಿ)
ಸ್ಪೆಷಲಿಸ್ಟ್ ಗ್ರೇಡ್-3 (ಸೈಕಿಯಾಟ್ರಿ) – 1 ಹುದ್ದೆ, ವಿದ್ಯಾರ್ಹತೆ: ಎಂಬಿಬಿಎಸ್ / ಪಿಜಿ ಡಿಪ್ಲೊಮಾ / ಪಿಜಿ (ಸಂಬಂಧಪಟ್ಟ ಸ್ಪೆಷಾಲಿಟಿ)
ಡೆಪ್ಯುಟಿ ಸೆಂಟ್ರಲ್ ಇಂಟೆಲಿಜೆನ್ಸ್ ಆಫೀಸರ್ (ಟೆಕ್ನಿಕಲ್) (ಡಿಸಿಐಒ / ಟೆಕ್) 9 ಹುದ್ದೆ, ವಿದ್ಯಾರ್ಹತೆ: ಪದವಿ / ಪಿಜಿ (ಸಂಬಂಧಿತ ಎಂಜಿನಿಯರಿಂಗ್)
ಸಹಾಯಕ ನಿರ್ದೇಶಕರು (ತೋಟಗಾರಿಕೆ) 4 ಹುದ್ದೆ, ವಿದ್ಯಾರ್ಹತೆ ಎಂಎಸ್‌ಸಿ ತೋಟಗಾರಿಕೆ
ಅಸಿಸ್ಟೆಂಟ್ ಡೈರೆಕ್ಟರ್ ಗ್ರೇಡ್-2 (ಐಇಡಿಎಸ್) (ಕೆಮಿಕಲ್) 5 ಹುದ್ದೆ, ವಿದ್ಯಾರ್ಹತೆ: ಡಿಪದವಿ (ಸಂಬಂಧಿತ ವಿಭಾಗ)/ ಪಿಜಿ (ರಸಾಯನಶಾಸ್ತ್ರ)
ಅಸಿಸ್ಟೆಂಟ್ ಡೈರೆಕ್ಟರ್ ಗ್ರೇಡ್-2 (ಐಇಡಿಎಸ್) (ಆಹಾರ) 19 ಹುದ್ದೆ, ವಿದ್ಯಾರ್ಹತೆ: ಪದವಿ (ಫುಡ್ ಟೆಕ್ನಾಲಜಿ)/ ಪಿಜಿ ಡಿಪ್ಲೋಮಾ (ಫ್ರೂಟ್ಸ್ ಟೆಕ್ನಾಲಜಿ)
ಅಸಿಸ್ಟೆಂಟ್ ಡೈರೆಕ್ಟರ್ ಗ್ರೇಡ್-2 (ಐಇಡಿಎಸ್) (ಹೊಸೇರಿ) 12 ಹುದ್ದೆ, ವಿದ್ಯಾರ್ಹತೆ: ಪದವಿ (ಟೆಕ್ಸ್ ಟೈಲ್ ಟೆಕ್ನಾಲಜಿ ಅಥವಾ ಹೋಸಿಯರಿ ಟೆಕ್ನಾಲಜಿ ಅಥವಾ ನೈಟಿಂಗ್‌ ಟೆಕ್ನಾಲಜಿ)
ಅಸಿಸ್ಟೆಂಟ್ ಡೈರೆಕ್ಟರ್ ಗ್ರೇಡ್-2 (ಐಇಡಿಎಸ್) (ಲೆದರ್ & ಪಾದರಕ್ಷೆ) – 8 ಹುದ್ದೆ, ವಿದ್ಯಾರ್ಹತೆ: ಪದವಿ (ಲೆದರ್ ಟೆಕ್ನಾಲಜಿ)
ಅಸಿಸ್ಟೆಂಟ್ ಡೈರೆಕ್ಟರ್ ಗ್ರೇಡ್-2 (ಐಇಡಿಎಸ್) (ಮೆಟಲ್ ಫಿನಿಶಿಂಗ್) – 2 ಹುದ್ದೆ, ವಿದ್ಯಾರ್ಹತೆ: ಪದವಿ (ಕೆಮಿಕಲ್)
ಟೆಕ್ನಾಲಜಿ ಅಥವಾ ಕೆಮಿಕಲ್ ಎಂಜಿನಿಯರಿಂಗ್) / ಪಿಜಿ (ಕೆಮಿಸ್ಟ್ರಿ)
ಎಂಜಿನಿಯರ್ ಮತ್ತು ಹಡಗು ಸರ್ವೇಯರ್ ಕಮ್-ಡೆಪ್ಯುಟಿ ಡೈರೆಕ್ಟರ್ ಜನರಲ್ (ಟೆಕ್ನಿಕಲ್) – 2 ಹುದ್ದೆ, ವಿದ್ಯಾರ್ಹತೆ: ಮೆರೈನ್ ಎಂಜಿನಿಯರ್ ಆಫೀಸರ್ ಕ್ಲಾಸ್ -1ರ ಪ್ರಮಾಣ ಪತ್ರ
ತರಬೇತಿ ಅಧಿಕಾರಿ (ಮಹಿಳಾ ತರಬೇತಿ)- ಉಡುಪು ತಯಾರಿಕೆ – 5 ಹುದ್ದೆ, ವಿದ್ಯಾರ್ಹತೆ: ಡಿಪ್ಲೋಮಾ / ಪದವಿ (ಎಂಜಿನಿಯರಿಂಗ್ ಅಥವಾ ತಂತ್ರಜ್ಞಾನ)
ತರಬೇತಿ ಅಧಿಕಾರಿ (ಮಹಿಳಾ ತರಬೇತಿ) – ಎಲೆಕ್ಟ್ರಾನಿಕ್ ಮಕಾನಿಕ್ – 3 ಹುದ್ದೆ, ವಿದ್ಯಾರ್ಹತೆ: ಡಿಪ್ಲೋಮಾ / ಪದವಿ (ಎಂಜಿನಿಯರಿಂಗ್ ಅಥವಾ ತಂತ್ರಜ್ಞಾನ)
ಅಸಿಸ್ಟೆಂಟ್‌ ಫೊಫೆಸರ್‌ – 1 ಹುದ್ದೆ, ವಿದ್ಯಾರ್ಹತೆ: ಎಂ.ಸಿ.ಎಚ್. ಯುರಾಲಜಿ ಅಥವಾ ಡಿಎನ್‌ಬಿ (ಯುರಾಲಜಿ)

ಅರ್ಜಿ ಶುಲ್ಕ ಮತ್ತು ವಯೋಮಿತಿ

ಅರ್ಜಿ ಶುಲ್ಕವಾಗಿ ಸಾಮಾನ್ಯ ವರ್ಗ ಅಭ್ಯರ್ಥಿಗಳಿ 25 ರೂ. ಪಾವತಿಸಬೇಕು. ಮೀಸಲಾತಿ ಹೊಂದಿರುವವರಿಗೆ ಅರ್ಜಿ ಶುಲ್ಕವಿಲ್ಲ. ಇನ್ನು ಒಂದೊಂದು ಹುದ್ದೆಗೆ ಒಂದೊಂದು ರೀತಿಯ ವಯೋಮಾನ ನಿಗದಿಪಡಿಸಲಾಗಿದೆ.

ಅಧಿಸೂಚನೆಗಾಗಿ ಇಲ್ಲಿ ಕ್ಲಿಕ್‌ ಮಾಡಿ.

ಅರ್ಜಿ ಸಲ್ಲಿಸಲು ಇಲ್ಲಿ ಕ್ಲಿಕ್‌ ಮಾಡಿ.

ಇದನ್ನೂ ಓದಿ: Job Alert: ಬಂಧನ್‌ ಬ್ಯಾಂಕ್‌ನಲ್ಲಿದೆ ಉದ್ಯೋಗಾವಕಾಶ; ಅಪ್ಲೈ ಮಾಡಲು ಮೇ 31 ಕೊನೆಯ ದಿನ

Continue Reading

ಪ್ರಮುಖ ಸುದ್ದಿ

Prajwal Revanna Case: ಏರ್‌ಪೋರ್ಟ್‌ನಲ್ಲೇ ಎಸ್‌ಐಟಿ ಠಿಕಾಣಿ, ನಾಳೆ ಮಧ್ಯರಾತ್ರಿಯೇ ಪ್ರಜ್ವಲ್‌ ರೇವಣ್ಣ ವಶಕ್ಕೆ

Prajwal Revanna Case: ಶುಕ್ರವಾರ ಬೆಳಗ್ಗೆ 10.30ಕ್ಕೆ ಎಸ್‌ಐಟಿ ಮುಂದೆ ಬರುವುದಾಗಿ ಪ್ರಜ್ವಲ್ ವಿಡಿಯೋದಲ್ಲಿ ಹೇಳಿಕೆ ನೀಡಿದ್ದಾರೆ. ಆದರೆ ಅಷ್ಟರವರೆಗೂ ಕಾಯಲು ಎಸ್‌ಐಟಿ ಸಿದ್ದವಾಗಿಲ್ಲ. ಯಾಕೆಂದರೆ ಬರುವುದಾಗಿ ತಿಳಿಸಿ ಪ್ರಜ್ವಲ್‌ ದೇಶದೊಳಗೇ ತಲೆ ಮರೆಸಿಕೊಳ್ಳಬಹುದು ಎಂಬ ಆತಂಕವೂ ಇದೆ.

VISTARANEWS.COM


on

Prajwal Revanna case
Koo

ಬೆಂಗಳೂರು: ಲೈಂಗಿಕ ದೌರ್ಜನ್ಯ (Physical Abuse) ಪ್ರಕರಣದ ಆರೋಪಿ, ಹಾಸನ ಸಂಸದ ಪ್ರಜ್ವಲ್ ರೇವಣ್ಣ (Hassan MP ‌Prajwal Revanna Case) ಭಾರತಕ್ಕೆ ಬರುತ್ತಿದ್ದಂತೆ ವಶಕ್ಕೆ ಪಡೆಯಲು ಸಿದ್ಧತೆ ನಡೆಸಿಕೊಂಡಿರುವ ಎಸ್‌ಐಟಿ (SIT) ತಂಡ, ಏರ್‌ಪೋರ್ಟ್‌ನಲ್ಲಿಯೇ (Kempegowda International Airport – KIA) ಸದ್ಯ ಠಿಕಾಣಿ ಹಾಕಿದೆ.

ಶುಕ್ರವಾರ ಬೆಳಗ್ಗೆ 10.30ಕ್ಕೆ ಎಸ್‌ಐಟಿ ಮುಂದೆ ಬರುವುದಾಗಿ ಪ್ರಜ್ವಲ್ ವಿಡಿಯೋದಲ್ಲಿ ಹೇಳಿಕೆ ನೀಡಿದ್ದಾರೆ. ಆದರೆ ಅಷ್ಟರವರೆಗೂ ಕಾಯಲು ಎಸ್‌ಐಟಿ ಸಿದ್ದವಾಗಿಲ್ಲ. ಯಾಕೆಂದರೆ ಬರುವುದಾಗಿ ತಿಳಿಸಿ ಪ್ರಜ್ವಲ್‌ ದೇಶದೊಳಗೇ ತಲೆ ಮರೆಸಿಕೊಳ್ಳಬಹುದು ಎಂಬ ಆತಂಕವೂ ಇದೆ. ಹೀಗಾಗಿ ಅದಕ್ಕೂ ಮುನ್ನವೇ, ಅಂದರೆ ವಿಮಾನ ನಿಲ್ದಾಣದಲ್ಲಿ ಇಳಿಯುತ್ತಲೇ ಆರೆಸ್ಟ್‌ ಮಾಡಲು ಎಸ್‌ಐಟಿ ಸಜ್ಜಾಗಿದೆ.

ನಾಳೆ ರಾತ್ರಿ 12.35ಕ್ಕೆ ಕೆಂಪೇಗೌಡ ವಿಮಾನ ನಿಲ್ದಾಣದ ಟರ್ಮಿನಲ್-2ಗೆ ಜರ್ಮನಿಯಿಂದ ಬರಲಿರುವ ಲುಫ್ತಾನ್ಸಾ ವಿಮಾನದಲ್ಲಿ ಪ್ರಜ್ವಲ್‌ ಲ್ಯಾಂಡ್ ಆಗಲಿದ್ದಾರೆ ಎಂದು ಗೊತ್ತಾಗಿದೆ. ವಿಮಾನದಿಂದ ಇಳಿದ ಬಳಿಕ ಪ್ರಜ್ವಲ್‌ ಇಮಿಗ್ರೇಷನ್‌‌‌‌‌ ಡೆಸ್ಕ್‌‌ಗೆ ಬರಬೇಕು. ಪಾಸ್‌ಪೋರ್ಟ್‌ಗೆ ಸ್ಟಾಂಪ್‌‌‌ ಹಾಕಿಸಬೇಕು. ಈಗ ಲುಕೌಟ್‌ ನೋಟೀಸ್‌ ಇರುವುದರಿಂದ ಇಮಿಗ್ರೇಶನ್‌ ಅಧಿಕಾರಿಗಳು ಪ್ರಜ್ವಲ್‌ ಅವರನ್ನು ವಶಕ್ಕೆ ಪಡೆಯಲಿದ್ದಾರೆ. ಏರ್‌‌ಪೋರ್ಟ್‌ ಅಧಿಕಾರಿಗಳಿಂದ SITಗೆ ಪ್ರಜ್ವಲ್ ಹಸ್ತಾಂತರ ನಡೆಯಲಿದೆ.

ಲುಫ್ತಾನ್ಸಾ ಏರ್‌ಲೈನ್ಸ್‌ನಲ್ಲಿ ಪ್ರಜ್ವಲ್‌ ಟಿಕೆಟ್ ಕಾಯ್ದಿರಿಸಿರುವುದರಿಂದ ಅಲರ್ಟ್ ಆಗಿರುವ ಎಸ್ಐಟಿ ತಂಡ, ಏರ್‌ಪೋರ್ಟ್‌ನಲ್ಲಿಯೇ ಠಿಕಾಣಿ ಹೂಡಿದೆ. ಎರಡು ಮೂರು ಬಾರಿ ಪ್ರಜ್ವಲ್‌ ಟಿಕೆಟ್ ಬುಕ್ ಮಾಡಿ‌ ಕೊನೆ ಗಳಿಗೆಯಲ್ಲಿ ಕ್ಯಾನ್ಸಲ್ ಮಾಡಿಕೊಂಡಿದ್ದರು. ಹಾಗಾಗಿ ಎಸ್ಐಟಿ ಅಧಿಕಾರಿಗಳು ಮುಂಜಾಗ್ರತಾ ಕ್ರಮವಾಗಿ ಏರ್ಪೋರ್ಟ್‌ನಲ್ಲಿ ಬೀಡು ಬಿಟ್ಟಿದ್ದಾರೆ. 31ರಂದು ಬರುದಾಗಿ ಹೇಳಿ ಒಂದು ದಿನ ಮುಂಚಿತವಾಗಿಯೇ ಬಂದ್ರೆ ಕಷ್ಟ ಎಂದು ಏರ್ಪೋರ್ಟ್‌ನಲ್ಲಿ ಎರಡೆರಡು ತಂಡಗಳು ಕಾಯುತ್ತಿವೆ.

ಬಂದ ಬಳಿಕ ಏನೇನು?

ಪ್ರಜ್ವಲ್ ರೇವಣ್ಣನನ್ನು ವಶಕ್ಕೆ ಪಡೆದ ಬಳಿಕ ಮೆಡಿಕಲ್ ಟೆಸ್ಟ್‌ ಮತ್ತಿತರ ಅಗತ್ಯ ವಿಧಿವಿಧಾನಗಳು ನಡೆಯಲಿವೆ. ನಂತರ ತನಿಖೆ ನಡೆಸಲು ಎಸ್ಐಟಿ ತಯಾರಿ ಮಾಡಿಕೊಳ್ಳುತ್ತಿದೆ. ಎರಡು ಕೋನಗಳಲ್ಲಿ ಪ್ರಜ್ವಲ್ ರೇವಣ್ಣರನ್ನು ವಿಚಾರಣೆ ಮಾಡಲು ಸಿದ್ಧತೆ ನಡೆಸಲಾಗಿದೆ. ತನಿಖೆ ವೇಳೆ ಪ್ರಜ್ವಲ್ ರೇವಣ್ಣ ಎರಡು ತರಹದ ಪ್ರತಿಕ್ರಿಯೆ ನೀಡುವ ಸಾಧ್ಯತೆಯಿದ್ದು, ತಪ್ಪು ಒಪ್ಪಿಕೊಳ್ಳಬಹುದು ಅಥವಾ ತಾನು ಮಾಡಿಯೇ ಇಲ್ಲ ಅನ್ನಬಹುದು. ಈ ಎರಡೂ ಆಯಾಮಗಳಲ್ಲೂ ಎಸ್‌ಐಟಿ ತನಿಖೆ ಮಾಡಬೇಕಿದೆ.

ಪ್ರಜ್ವಲ್ ರೇವಣ್ಣ ತಪ್ಪು ಒಪ್ಪಿಕೊಂಡರೆ ಎಸ್‌ಐಟಿ ಕೆಲಸ ಸರಾಗವಾಗಲಿದೆ. ಆರೋಪಿತನ ಹೇಳಿಕೆ ದಾಖಲಿಸಿಕೊಂಡು ಸ್ಥಳ ಮಹಜರು ಮಾಡಲಾಗುತ್ತದೆ. ಎಲ್ಲೆಲ್ಲಿ ಕೃತ್ಯ ಎಸಗಲಾಗಿದೆ ಎಂದು ಸಂತ್ರಸ್ತೆ ನೀಡಿರುವ ಹೇಳಿಕೆ ಆಧಾರದಲ್ಲಿ ಕರೆದೊಯ್ದು ಸ್ಥಳ ಮಹಜರು ಮಾಡುತ್ತಾರೆ. ಎಂಪಿ ಗೆಸ್ಟ್ ಹೌಸ್, ಹೊಳೆನರಸೀಪುರದ ಫಾರ್ಮ್ ಹೌಸ್ ಸೇರಿ ಹಲವೆಡೆ ಪರಿಶೀಲನೆ ನಡೆಸಲಿದ್ದಾರೆ.

ಪ್ರಜ್ವಲ್‌ ತಮ್ಮ ಮೇಲಿರುವ ಆರೋಪ ತಳ್ಳಿ ಹಾಕಿದರೆ ಸಂತ್ರಸ್ತೆ ಹೇಳಿಕೆ ಪ್ರಾಮುಖ್ಯತೆ ಪಡೆಯಲಿದೆ. ಆಕೆಯ ಹೇಳಿಕೆ ಆಧಾರದ ಮೇಲೆ ಚಾರ್ಜ್ ಶೀಟ್ ಸಲ್ಲಿಕೆ ನಡೆಯುತ್ತದೆ. ಈಗಾಗಲೇ ಸಂತ್ರಸ್ತೆ ಹೇಳಿಕೆ ದಾಖಲಿಸಿರುವ ಎಸ್ಐಟಿ, ಜೊತೆಗೆ ಸ್ಥಳ ಮಹಜರು ನಡೆಸಿ ಒಂದಷ್ಟು ಸಾಕ್ಷ್ಯಗಳನ್ನು ಕಲೆಹಾಕಿದೆ. ಇದರ ಜೊತೆಗೆ ಆರೋಪಿ ಹೇಳಿಕೆಯನ್ನೂ ದಾಖಲಿಸಿಕೊಂಡು ಚಾರ್ಜ್ ಶೀಟ್ ಸಲ್ಲಿಸಲಾಗುತ್ತದೆ.

ಇದನ್ನೂ ಓದಿ: Prajwal Revanna Case: ಪ್ರಜ್ವಲ್‌ ಮನೆಯಿಂದ ಹಾಸಿಗೆ, ಹೊದಿಕೆ ಕೊಂಡೊಯ್ದ ಎಸ್‌ಐಟಿ; ಏನ್‌ ಸಿಗ್ತು?

Continue Reading
Advertisement
Gold Rate Today
ಚಿನ್ನದ ದರ12 mins ago

Gold Rate Today: ಇಂದು ಚಿನ್ನದ ಬೆಲೆಯಲ್ಲಿ ತುಸು ಏರಿಕೆ; ಖರೀದಿಗೆ ಮುನ್ನ ದರ ಗಮನಿಸಿ

World Digestive Health Day
ಆರೋಗ್ಯ13 mins ago

World Digestive Health Day: ಜೀರ್ಣಕ್ರಿಯೆಯಲ್ಲಿ ತೊಡಕು ಅನಾರೋಗ್ಯಕ್ಕೆ ದಾರಿ; ಈ ಸಲಹೆ ಪಾಲಿಸಿ

ರಾಹುಲ್‌ ಗಾಂಧಿ rahul gandhi ippb account 2
ಪ್ರಮುಖ ಸುದ್ದಿ21 mins ago

ಅಧಿಕಾರಕ್ಕೆ ಬಂದ್ರೆ ನಿಮ್ಮ ಖಾತೆಗೆ ಟಕಾಟಕ್ 1 ಲಕ್ಷ ಎಂದಿದ್ದ ರಾಹುಲ್ ಗಾಂಧಿ! ಪೋಸ್ಟ್ ಆಫೀಸ್ ಮುಂದೆ ಮುಸ್ಲಿಂ ಮಹಿಳೆಯರ ನೂಕುನುಗ್ಗಲು!!

All Eyes on Rafah
ವಿದೇಶ29 mins ago

All Eyes on Rafah: ಪ್ಯಾಲೆಸ್ತೀನ್‌ಗೆ ಬೆಂಬಲಿಸಿ ರೋಹಿತ್‌ ಪತ್ನಿ ಪೋಸ್ಟ್‌; ಫುಲ್‌ ಟ್ರೋಲ್‌- ಏನಿದು ʼಆಲ್‌ ಐಸ್‌ ಆನ್‌ ರಫಾʼ?

Sujay Hegde Manasare actor Engagement with Prerana
ಕಿರುತೆರೆ33 mins ago

Sujay Hegde: ನಿಶ್ಚಿತಾರ್ಥ ಮಾಡಿಕೊಂಡ ‘ಮನಸಾರೆ’ ಧಾರಾವಾಹಿಯ ನಟ ಸುಜಯ್ ಹೆಗಡೆ

Viral News
ವೈರಲ್ ನ್ಯೂಸ್1 hour ago

Viral News: ರೈಲಿನಲ್ಲಿ ಅಶ್ಲೀಲವಾಗಿ ಮೈ ಕುಣಿಸಿದ ಮಹಿಳೆ; ರೀಲ್ಸ್ ಮಾಡುವವರ ಕಾಟವಿಲ್ಲದ ಪ್ರಯಾಣ ಅಸಾಧ್ಯ ಎಂದ ನೆಟ್ಟಿಗರು

Rahul Gandhi
ದೇಶ1 hour ago

Rahul Gandhi: ನೋಡ ನೋಡ್ತಿದ್ದಂತೆ ತಲೆ ಮೇಲೆ ನೀರು ಸುರಿದುಕೊಂಡ ರಾಹುಲ್‌ ಗಾಂಧಿ! ವಿಡಿಯೋ ಇದೆ

dk shivakumar jagdeep dhankar
ಪ್ರಮುಖ ಸುದ್ದಿ1 hour ago

DK Shivakumar: ಕುತೂಹಲ ಕೆರಳಿಸಿದ ಡಿಕೆಶಿ- ಉಪರಾಷ್ಟ್ರಪತಿ ಭೇಟಿ; ʼಬಿಜೆಪಿಗೆ ಸೇರ್ತೀರಾʼ ಎಂದ ನೆಟ್ಟಿಗರು!

Pushpa 2 SOOSEKI Couple Song Lyrical Video out
ಟಾಲಿವುಡ್1 hour ago

Pushpa 2: ʼಪುಷ್ಪ 2ʼ ಸಿನಿಮಾದ ಎರಡನೇ ಹಾಡು ರಿಲೀಸ್‌: ಅಲ್ಲು ಜತೆ ಹೆಜ್ಜೆ ಹಾಕಿದ ರಶ್ಮಿಕಾ!

UPI Safety Tips
ವಾಣಿಜ್ಯ1 hour ago

UPI Safety Tips: ಈ ಟಿಪ್ಸ್ ಪಾಲಿಸಿ, ಮೊಬೈಲ್ ನಿಂದ ಹಣ ಪಾವತಿಸುವಾಗ ಆಗುವ ವಂಚನೆಯಿಂದ ಪಾರಾಗಿ

Sharmitha Gowda in bikini
ಕಿರುತೆರೆ8 months ago

Geetha Serial Kannada: ನಿದ್ದೆ ಕದ್ದ ಚೋರಿ! ನಟಿ `ಭಾನುಮತಿ’ ಹಾಟ್‌ ಪೋಟೊಗಳಿಗೆ ಫ್ಯಾನ್ಸ್ ಫುಲ್ ಫಿದಾ

Kannada Serials
ಕಿರುತೆರೆ8 months ago

Kannada Serials TRP: 2ನೇ ಸ್ಥಾನದಲ್ಲಿ 2 ಧಾರಾವಾಹಿಗಳು; ಟಿಆರ್‌ಪಿ ರೇಸ್‌ನಲ್ಲಿಲ್ಲ ಭಾಗ್ಯಲಕ್ಷ್ಮೀ!

Bigg Boss- Saregamapa 20 average TRP
ಕಿರುತೆರೆ7 months ago

Kannada Serials TRP: ಏಳನೇ ಸ್ಥಾನಕ್ಕೆ ʻಅಮೃತಧಾರೆʼ ಕುಸಿತ; ಬಿಗ್‌ ಬಾಸ್‌-ಸರಿಗಮಪ ಟಿಆರ್‌ಪಿ ಎಷ್ಟು?

galipata neetu
ಕಿರುತೆರೆ6 months ago

Kanyadana Serial: ಕಿರುತೆರೆಗೆ ಮತ್ತೆ ಎಂಟ್ರಿ ಕೊಟ್ಟ ʻಗಾಳಿಪಟʼ ಖ್ಯಾತಿಯ ʻನೀತುʼ!

Kannada Serials
ಕಿರುತೆರೆ8 months ago

Kannada Serials TRP: ನಾಲ್ಕನೇ ಸ್ಥಾನಕ್ಕೆ ಕುಸಿತ ಕಂಡ ʻಸೀತಾ ರಾಮʼ; ಟಿಆರ್‌ಪಿ ರೇಸ್‌ಗೆ ʻಭಾಗ್ಯಲಕ್ಷ್ಮಿʼ ಬ್ಯಾಕ್‌!

Kannada Serials
ಕಿರುತೆರೆ8 months ago

Kannada Serials TRP: ಟಿಆರ್‌ಪಿಯಲ್ಲಿ ʻಭಾಗ್ಯಲಕ್ಷ್ಮೀʼ ಹವಾ; ʻಪುಟ್ಟಕ್ಕನ ಮಕ್ಕಳುʼ ಧಾರಾವಾಹಿಗೆ ಸಂಕಷ್ಟ!

Bigg Boss' dominates TRP; Sita Rama fell to the sixth position
ಕಿರುತೆರೆ7 months ago

Kannada Serials TRP: ಟಿಆರ್‌ಪಿಯಲ್ಲಿ ʻಬಿಗ್ ಬಾಸ್ʼದೇ ಮೇಲುಗೈ; 6ನೇ ಸ್ಥಾನಕ್ಕೆ ಕುಸಿದ ʻಸೀತಾ ರಾಮʼ

geetha serial Dhanush gowda engagement
ಕಿರುತೆರೆ6 months ago

Dhanush Gowda: ಗೀತಾ ಧಾರಾವಾಹಿ ನಟನ ನಿಶ್ಚಿತಾರ್ಥ; ಭವ್ಯಾಳ ಕಮೆಂಟ್‌ ಬಾಕ್ಸ್‌ ಆಫ್‌!

varun
ಕಿರುತೆರೆ6 months ago

Brindavana Serial: ʼಬೃಂದಾವನʼ ಧಾರಾವಾಹಿಯಲ್ಲಿ ದೊಡ್ಡ ಟ್ವಿಸ್ಟ್‌; ಪ್ರಮುಖ ಪಾತ್ರಧಾರಿಯೇ ಬದಲು

Kannada Serials
ಕಿರುತೆರೆ9 months ago

Kannada Serials TRP: ಟಿಆರ್‌ಪಿಯಲ್ಲಿ ಏರಿಕೆ ಕಂಡ ʻಅಮೃತಧಾರೆʼ; ʻಗಟ್ಟಿಮೇಳʼಕ್ಕೆ ನಾಲ್ಕನೇ ಸ್ಥಾನ!

Karnataka weather Forecast
ಮಳೆ18 hours ago

Karnataka Weather : ಚಿಕ್ಕಮಗಳೂರಲ್ಲಿ ಭಾರಿ ಮಳೆ; ಯಾದಗಿರಿಯಲ್ಲಿ ಕರೆಂಟ್‌ ಕಟ್‌, ಜನರೇಟರ್‌ನಿಂದ ಮೊಬೈಲ್‌ಗಳಿಗೆ ಚಾರ್ಜಿಂಗ್‌!

tumkur murder
ತುಮಕೂರು1 day ago

Tumkur Murder : ಮಗುವಿನ ಮುಂದೆಯೇ ಹೆಂಡತಿಯ ಕತ್ತು, ದೇಹವನ್ನು ಕತ್ತರಿಸಿ ಬಿಸಾಡಿದ ದುಷ್ಟ

Karnataka Weather Forecast
ಮಳೆ2 days ago

Karnataka Weather : ಕಡಲತೀರದಲ್ಲಿ ಅಲೆಗಳ ಅಬ್ಬರ, ಪ್ರವಾಸಿಗರಿಗೆ ಕಟ್ಟೆಚ್ಚರ; ನಾಳೆಯೂ ಗಾಳಿ ಸಹಿತ ಮಳೆ ಅಬ್ಬರ

Karnataka Rain
ಮಳೆ3 days ago

Karnataka Rain : ಯಾದಗಿರಿಯಲ್ಲಿ ಬಿರುಗಾಳಿ ಸಹಿತ ಮಳೆ; ಸಿಡಿಲು ಬಡಿದು ಎಮ್ಮೆಗಳು ಸಾವು

Basavanagudi News
ಬೆಂಗಳೂರು3 days ago

Basavanagudi News : ಪೂಜಾ ಸಾಮಗ್ರಿಗೆ ಒನ್‌ ಟು ಡಬಲ್‌ ರೇಟ್‌; ದೊಡ್ಡ ಗಣಪತಿ ದೇಗುಲದಲ್ಲಿ ಕೈ ಕೈ ಮಿಲಾಯಿಸಿದ ಭಕ್ತರು-ವ್ಯಾಪಾರಿಗಳು

Karnataka Rain
ಮಳೆ4 days ago

Karnataka Rain : ಭಾರಿ ಮಳೆಗೆ ರಸ್ತೆ ಕಾಣದೆ ರಾಜಕಾಲುವೆಗೆ ಉರುಳಿದ ಆಟೋ; ಚಾಲಕ ಸ್ಥಳದಲ್ಲೇ ಸಾವು

dina bhavishya read your daily horoscope predictions for May 23 2024
ಭವಿಷ್ಯ6 days ago

Dina Bhavishya : 12 ರಾಶಿಯವರ ಇಂದಿನ ಭವಿಷ್ಯ ಹೇಗಿದೆ? ಯಾರಿಗೆ ಶುಭ, ಯಾರಿಗೆ ಅಶುಭ ಫಲ?

Karnataka Weather Forecast
ಮಳೆ1 week ago

Karnataka Weather : ಮುಂದುವರಿಯಲಿದೆ ವರುಣಾರ್ಭಟ; ಬೆಂಗಳೂರಲ್ಲೂ ಭಾರಿ ಮಳೆ ನಿರೀಕ್ಷೆ!

Karnataka Rain
ಮಳೆ1 week ago

Karnataka Rain : ಭಾರಿ ಮಳೆಗೆ ಕರೆಂಟ್‌ ಕಟ್‌, ಕತ್ತಲಲ್ಲೇ ರೋಗಿಗಳಿಗೆ ಟ್ರೀಟ್‌ಮೆಂಟ್‌; ಮರ ಬಿದ್ದರೂ ಪಾರಾದ ತಾಯಿ-ಮಗ

Love Case Father throws hot water on man who loved his daughter for coming home
ಕೊಡಗು1 week ago

Love Case : ಮನೆಗೆ ಬಂದ ಪ್ರೇಮಿಗೆ ಕೊತ ಕೊತ ಕುದಿಯುವ ನೀರು ಎರಚಿದ ಯುವತಿ ತಂದೆ!

ಟ್ರೆಂಡಿಂಗ್‌