horoscope today read your daily horoscope predictions for june‌ 22, 2023 Horoscope Today : ಈ ರಾಶಿಯವರಿಂದು ಹೂಡಿಕೆ ಮಾಡುವಾಗ ಎಚ್ಚರಿಕೆ ವಹಿಸಿ! - Vistara News

ಪ್ರಮುಖ ಸುದ್ದಿ

Horoscope Today : ಈ ರಾಶಿಯವರಿಂದು ಹೂಡಿಕೆ ಮಾಡುವಾಗ ಎಚ್ಚರಿಕೆ ವಹಿಸಿ!

ಶ್ರೀ ಶಕೇ 1945, ಶೋಭಕೃತ್ ನಾಮ ಸಂವತ್ಸರ, ಉತ್ತರಾಯಣ, ಗ್ರೀಷ್ಮ ಋತು, ಆಷಾಢ ಮಾಸ, ಶುಕ್ಲ ಪಕ್ಷದ ಚೌತಿಯ ದಿನವಾದ ಇಂದು ದ್ವಾದಶ ರಾಶಿಗಳ ಭವಿಷ್ಯ (Horoscope Today) ಹೇಗಿದೆ ಎಂಬ ಮಾಹಿತಿಯನ್ನು ಇಲ್ಲಿ ನೀಡಲಾಗಿದೆ.

VISTARANEWS.COM


on

horoscope today
ಮಹತ್ವದ, ಕುತೂಹಲಕರ ಸುದ್ದಿಗಾಗಿ ಫಾಲೊ ಮಾಡಿ
Koo

ಇಂದಿನ ಪಂಚಾಂಗ (22-06-2023)

ಶ್ರೀ ಶಕೇ 1945, ಶೋಭಕೃತ್‌ ನಾಮ ಸಂವತ್ಸರ, ಉತ್ತರಾಯಣ,
ಗ್ರೀಷ್ಮ ಋತು, ಆಷಾಢ ಮಾಸ, ಶುಕ್ಲ ಪಕ್ಷ.

ತಿಥಿ: ಚೌತಿ 17:27 ವಾರ: ಗುರುವಾರ
ನಕ್ಷತ್ರ: ಆಶ್ಲೇಷಾ 28:16 ಯೋಗ: ಹರ್ಷಣ 27:29
ಕರಣ: ವಿಷ್ಟಿ (ಭದ್ರ) 17:27 ಇಂದಿನ ವಿಶೇಷ: ವಿನಾಯಕೀ ಚುತುರ್ಥಿ
ಅಮೃತಕಾಲ: ಮಧ್ಯರಾತ್ರಿ 02 ಗಂಟೆ 30 ನಿಮಿಷದಿಂದ ಬೆಳಗಿನ ಜಾವ 04 ಗಂಟೆ 18 ನಿಮಿಷದವರೆಗೆ.

ಸೂರ್ಯೋದಯ : 05:55 ಸೂರ್ಯಾಸ್ತ : 06:48

ರಾಹುಕಾಲ : ಮಧ್ಯಾಹ್ನ 1.30 ರಿಂದ 3.00
ಗುಳಿಕಕಾಲ: ಬೆಳಗ್ಗೆ 9.00 ರಿಂದ 10.30
ಯಮಗಂಡಕಾಲ: ಬೆಳಗ್ಗೆ 6.00 ರಿಂದ 7.30

ದ್ವಾದಶ ರಾಶಿ ಭವಿಷ್ಯ (Horoscope Today)

Horoscope Today

ಮೇಷ: ಸ್ನೇಹಿತರು ಅಥವಾ ಕುಟುಂಬದ ಸದಸ್ಯರೊಂದಿಗೆ ಪ್ರಯಾಣ ಮಾಡುವ ಸಾಧ್ಯತೆ. ಆರೋಗ್ಯದಲ್ಲಿ ಸ್ವಲ್ಪ ಮಟ್ಟಿನ ವ್ಯತ್ಯಾಸದಿಂದ ಖರ್ಚು. ಹಿರಿಯರ ಮಾರ್ಗದರ್ಶನ ಸಿಗಲಿದೆ. ಅತಿಥಿಗಳ ಆಗಮನದಿಂದ ನಿಮ್ಮ ಯೋಜಿತ ಕಾರ್ಯ ವಿಳಂಬವಾಗುವ ಸಾಧ್ಯತೆ. ವೈವಾಹಿಕ ಜೀವನದಲ್ಲಿ ವಿರಸ ಉಂಟಾಗುವ ಸಾಧ್ಯತೆ, ಮಾತಿನಲ್ಲಿ ಹಿಡಿತವಿರಲಿ. ಕೌಟುಂಬಿಕವಾಗಿ ಸಾಧಾರಣ ಫಲ.
ಅದೃಷ್ಟ ಸಂಖ್ಯೆ: 4

Horoscope Today

ವೃಷಭ: ಕೆಲಸ ಕಾರ್ಯಗಳಲ್ಲಿ ಯಶಸ್ಸು , ಪ್ರಶಂಸೆ ದೊರೆಯುವುದು. ದಿನದ ಮಟ್ಟಿಗೆ ಖರ್ಚು. ಸಂಬಂಧವಿರದ ವಿಷಯಗಳಿಗೆ ಕಿವಿಗೊಡವುದು ಬೇಡ. ಹೂಡಿಕೆ ವ್ಯವಹಾರದಲ್ಲಿ ತೊಡಗುವುದು ಬೇಡ. ಹಳೆಯ ಕಹಿ ವಿಚಾರಗಳನ್ನು ನೆನಪುಮಾಡಿಕೊಂಡು ಮನಸ್ಸಿಗೆ ಗಾಯ ಮಾಡಿಕೊಳ್ಳುವುದು ಬೇಡ. ಆರೋಗ್ಯ ಮಧ್ಯಮ. ಕೌಟುಂಬಿಕವಾಗಿ ಸಾಧಾರಣ ಫಲ.
ಅದೃಷ್ಟ ಸಂಖ್ಯೆ: 3

Horoscope Today

ಮಿಥುನ: ನಿಮ್ಮ ಅಭಿಪ್ರಾಯಗಳಿಗೆ ವಿರೋಧ ವ್ಯಕ್ತವಾಗವ ಸಾಧ್ಯತೆ, ಹೀಗಾಗಿ ಆತುರದಲ್ಲಿ ಮಾತನಾಡಿ ಮಾನಸಿಕ ನೆಮ್ಮದಿ ಹಾಳು ಮಾಡಿಕೊಳ್ಳುವುದು ಬೇಡ. ಅನಿರೀಕ್ಷಿತ ಖರ್ಚು. ಆರೋಗ್ಯದ ಕಡೆಗೆ ಕಾಳಜಿ ವಹಿಸುವುದು ಉತ್ತಮ. ಕೌಟುಂಬಿಕವಾಗಿ ಸಾಧಾರಣ ಫಲ.
ಅದೃಷ್ಟ ಸಂಖ್ಯೆ: 1

Horoscope Today

ಕಟಕ: ಕೆಲಸ ಕಾರ್ಯಗಳಲ್ಲಿ ಯಶಸ್ಸು ಸಿಗಲಿದೆ. ಗೃಹಬಳಕೆ ಸಾಧನಗಳ ಖರೀದಿ ಸಾಧ್ಯತೆಯಿಂದ ಖರ್ಚು. ವ್ಯಾಪಾರ ವ್ಯವಹಾರದಲ್ಲಿ ಪ್ರಗತಿ. ಅತಿಥಿಗಳ ಆಗಮನ ಹರ್ಷ ತರಲಿದೆ. ಆರೋಗ್ಯ ಉತ್ತಮ. ಉದ್ಯೋಗಿಗಳಿಗೆ ಕಿರಿಕಿರಿ ಸಾಧ್ಯತೆ. ಕೌಟುಂಬಿಕವಾಗಿ ಶುಭ ಫಲ.
ಅದೃಷ್ಟ ಸಂಖ್ಯೆ: 5

Horoscope Today

ಸಿಂಹ: ನೀವು ಆಕರ್ಷಕ ಮಾತುಗಳಿಂದ ಇತರರನ್ನು ಆಕರ್ಷಿಸುವಿರಿ. ನಾಲಿಗೆಯ ರುಚಿಗೆ ಮಾರು ಹೋಗಿ ಆರೋಗ್ಯ ಹಾಳು ಮಾಡಿಕೊಳ್ಳುವುದು ಬೇಡ, ಸೇವನೆ ಮಿತಿಯಲ್ಲಿರಲಿ. ವಿವಾಹ ಆಕಾಂಕ್ಷಿಗಳಿಗೆ ಶುಭ ಸುದ್ದಿ ಸಿಗುವ ಸಾಧ್ಯತೆ. ಹಣಕಾಸು ವ್ಯವಹಾರದಲ್ಲಿ ಪ್ರಗತಿ. ಸಂಗಾತಿಯ ಮಾತುಗಳು ಮಧುರವೇನಿಸುವವು. ಕೌಟುಂಬಿಕವಾಗಿ ಶುಭ ಫಲ.
ಅದೃಷ್ಟ ಸಂಖ್ಯೆ: 3

Horoscope Today

ಕನ್ಯಾ: ನಿಮ್ಮ ತ್ಯಾಗದ ಮನೋಭಾವ ನಿಮಗೆ ಸಂತಸ ತರುವುದು. ಯಾರೊಂದಿಗೂ ದಿನದ ಮಟ್ಟಿಗೆ ಹಣಕಾಸಿನ ವ್ಯವಹಾರ ಮಾಡಬೇಡಿ, ವಿನಾಕಾರಣ ವಿವಾದವನ್ನು ಮೈಮೇಲೆ ಎಳೆದುಕೊಳ್ಳುವುದು ಬೇಡ. ಕುಟುಂಬದಲ್ಲಿ ಅನಾವಶ್ಯಕ ಮಾತುಗಳಿಂದ ಜಗಳವಾಗಬಹುದು, ಮೌನದಿಂದ ವರ್ತಿಸಿ. ಕೌಟುಂಬಿಕವಾಗಿ ಸಾಧಾರಣ ಫಲ.
ಅದೃಷ್ಟ ಸಂಖ್ಯೆ: 1

ಭವಿಷ್ಯ ಮತ್ತು ಜ್ಯೋತಿಷ್ಯಕ್ಕೆ ಸಂಬಂಧಿಸಿದ ಲೇಖನ/ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್‌ (Click Here) ಮಾಡಿ

Horoscope Today

ತುಲಾ: ಇತರರು ನಿಮ್ಮ ಕಾರ್ಯಗಳನ್ನು ಪ್ರಶಂಸಿಸುವರು. ಹಣಕಾಸಿನ ಹರಿವು ಹೆಚ್ಚಾಗಲಿದೆ. ವ್ಯಾಪಾರ ವ್ಯವಹಾರದಲ್ಲಿ ಪ್ರಗತಿ. ಸಹದ್ಯೋಗಿಗಳು ನಿಮ್ಮ ವಿರುದ್ಧ ಪಿತೂರಿ ಮಾಡುವ ಸಾಧ್ಯತೆ, ಎಚ್ಚರಿಕೆ ಇರಲಿ. ವಿನಾಕಾರಣ ಜಗಳ ಮಾಡಿ ಮನಸ್ಸು ಕೆಡಿಸಿಕೊಳ್ಳುವುದು ಬೇಡ. ಕೌಟುಂಬಿಕವಾಗಿ ಮಿಶ್ರ ಫಲ.
ಅದೃಷ್ಟ ಸಂಖ್ಯೆ: 4

Horoscope Today

ವೃಶ್ಚಿಕ: ಇತರರನ್ನು ಟೀಕಿಸಲು ನಿಮ್ಮ ಅಮೂಲ್ಯ ಸಮಯ ವ್ಯರ್ಥ ಮಾಡುವುದು ಬೇಡ. ಅನಾವಶ್ಯಕ ವಿಚಾರ ಮಾಡಿ ಆರೋಗ್ಯ ಹಾಳು ಮಾಡಿಕೊಳ್ಳುವುದು ಬೇಡ. ಹಣಕಾಸು ವ್ಯವಹಾರದಲ್ಲಿ ಪ್ರಗತಿ. ಉದ್ಯೋಗಿಗಳಿಗೆ ಶುಭ. ಕುಟುಂಬದಲ್ಲಿ ಹಳೆಯ ವಿಚಾರಗಳು ಕಲಹ ಸೃಷ್ಟಿಸಬಹುದು,ಮಾತು ಮಿತವಾಗಿರಲಿ. ಕೌಟುಂಬಿಕವಾಗಿ ಸಾಧಾರಣ ಫಲ.
ಅದೃಷ್ಟ ಸಂಖ್ಯೆ: 5

Horoscope Today

ಧನಸ್ಸು: ಕುಟುಂಬದ ಸದಸ್ಯರೊಂದಿಗೆ ಮನರಂಜನಾ ಕಾರ್ಯಕ್ರಮಗಳಲ್ಲಿ ಭಾಗವಹಿಸುವ ಸಾಧ್ಯತೆ. ಅಮೂಲ್ಯ ವಸ್ತುಗಳ ಮೇಲೆ ಗಮನವಿರಲಿ. ದಿನದ ಮಟ್ಟಿಗೆ ಹೂಡಿಕೆ ವ್ಯವಹಾರದಲ್ಲಿ ತೊಡುಗುವುದು ಬೇಡ. ಹಣಕಾಸು ಪ್ರಗತಿ ಸಾಧಾರಣ. ವಿನಾಕಾರಣ ನಿಮ್ಮ ಸಿಟ್ಟು ಸಂಗಾತಿಯ ಮೇಲೆ ಹಾಕಿ, ಕುಟುಂಬದ ವಾತಾವರಣ ಕೆಡಿಸುವುದು ಬೇಡ. ಕೌಟುಂಬಿಕವಾಗಿ ಮಿಶ್ರ ಫಲ.
ಅದೃಷ್ಟ ಸಂಖ್ಯೆ: 2

Horoscope Today

ಮಕರ: ನಿಮ್ಮ ಕೋಪದ ಸ್ವಭಾವದಿಂದ ಇತರರೊಂದಿಗೆ ವಾದಕ್ಕೆಳಿಯಬೇಡಿ. ಆತುರದಲ್ಲಿ ಆಡಿದ ಅತಿರೇಕದ ಮಾತುಗಳು ಜಗಳ ತಂದೀತು. ಆರೋಗ್ಯದ ಕಡೆಗೆ ಗಮನವಿರಲಿ. ದಿನದ ಮಟ್ಟಿಗೆ ಖರ್ಚು. ಅತ್ಮೀರೊಂದಿಗೆ ಪ್ರಯಾಣಿಸುವ ಸಾಧ್ಯತೆ. ಉದ್ಯೋಗಿಗಳಿಗೆ ಕಿರಿಕಿರಿ ಸಾಧ್ಯತೆ. ಕೌಟುಂಬಿಕವಾಗಿ ಶುಭ ಫಲ.
ಅದೃಷ್ಟ ಸಂಖ್ಯೆ: 2

Horoscope Today

ಕುಂಭ: ಕೆಲಸಕ್ಕೆ ಹಾಕಿದ ಶ್ರಮ ವ್ಯರ್ಥವಾಗದಂತೆ ಎಚ್ಚರಿಕೆ ವಹಿಸಿ. ಆತುರದಲ್ಲಿ ಅತಿರೇಕದ ಮಾತುಗಳನ್ನು ಆಡುವುದು ಸರಿಯಲ್ಲ, ತಾಳ್ಮೆಯಿಂದ ಮಾತನಾಡಿ. ವಿವಾಹ ಅಪೇಕ್ಷಿತರಿಗೆ ಶುಭ ಸುದ್ದಿ ಸಿಗುವ ಸಾಧ್ಯತೆ. ಹಿರಿಯರಿಂದ ಮಾರ್ಗದರ್ಶನ ಸಿಗಲಿದೆ. ಕೌಟುಂಬಿಕವಾಗಿ ಶುಭ ಫಲ.
ಅದೃಷ್ಟ ಸಂಖ್ಯೆ: 9

Horoscope Today

ಮೀನ: ರಹಸ್ಯ ಕಾರ್ಯಗಳು ಯಶಸ್ಸು ತಂದು ಕೊಡಲಿವೆ. ಕುಟುಂಬಕ್ಕೆ ಸಮಯವನ್ನು ನೀಡುವಿರಿ. ವಿನಾಕಾರಣ ಕೋಪಗೊಂಡು ಮನಸ್ಸಿನ ನೆಮ್ಮದಿ ಹಾಳು ಮಾಡಿಕೊಳ್ಳುವುದು ಬೇಡ. ಖರ್ಚು ಹೆಚ್ಚಾಗಲಿದೆ. ಸಂಗಾತಿ ನಿಮ್ಮ ಮನಸ್ಸಿನ ಭಾವನೆಗಳಿಗೆ ಸ್ಪಂದಿಸುವರು. ಮಧುರ ಪ್ರೇಮ ಅಂಕುರವಾಗಲಿದೆ. ಕೌಟುಂಬಿಕವಾಗಿ ಶುಭ ಫಲ.
ಅದೃಷ್ಟ ಸಂಖ್ಯೆ: 7

Horoscope Today

ವಿದ್ವಾನ್ ಶ್ರೀ ನವೀನಶಾಸ್ತ್ರಿ ರಾ. ಪುರಾಣಿಕ
ಖ್ಯಾತ ಜ್ಯೋತಿಷಿ ಹಾಗೂ ಉಪನ್ಯಾಸಕರು

M: 9481854580 | pnaveenshastri@gmail.com

ಇದನ್ನೂ ಓದಿ : Vastu Tips For Dining Hall: ಮನೆಯ ಡೈನಿಂಗ್‌ ಹಾಲ್‌ನಲ್ಲಿ ಈ ಆಕಾರದ ಟೇಬಲ್‌ ಇರಲೇಬಾರದು!

ಕ್ಷಣ ಕ್ಷಣದ ಮಾಹಿತಿಗಾಗಿ Vistara News FaceBook ಪೇಜ್ ಫಾಲೋ ಮಾಡಿ
ಮಹತ್ವದ ಮಾಹಿತಿಗಾಗಿ ವಿಸ್ತಾರ ನ್ಯೂಸ್ ಆ್ಯಪ್ ಉಚಿತವಾಗಿ ಡೌನ್ ಲೋಡ್ ಮಾಡಿಕೊಳ್ಳಿ: Andriod App | IOS App
Continue Reading
Click to comment

Leave a Reply

Your email address will not be published. Required fields are marked *

ಪ್ರಮುಖ ಸುದ್ದಿ

V Somanna : ತಮ್ಮನ್ನು ಕಡೆಗಣಿಸಿದ ಜಿಲ್ಲಾಧಿಕಾರಿ, ಸಿಇಒಗೆ ಕೇಂದ್ರ ಸಚಿವ ಸೋಮಣ್ಣ ತರಾಟೆ

V Somanna :ಸೋಮಣ್ಣ ಸ್ವಾಗತಕ್ಕೆ ಸಹಾಯಕ ಆಯುಕ್ತರನ್ನು ಕಳುಹಿಸಿದ್ದರು. ಅವರಿಬ್ಬರೂ ಜಿಲಾಸ್ತುವಾರಿ ಸಚಿವ ಜಿ.ಪರಮೇಶ್ವರ್ ಪ್ರವಾಸದ ಕಾರ್ಯಕ್ರಮಗಳಿಗೆ ಹಾಜರಾಗಲು ಹೋಗಿದ್ದರು. ಅವರಿಬ್ಬರ ನಡೆಯಿಂದ ಕೆಂಡಾಮಂಡಲರಾದ ಸೋಮಣ್ಣ ಫೋನ್ ಮೂಲಕವೇ ತರಾಟೆಗೆ ತೆಗೆದುಕೊಂಡಿದ್ದಾರೆ.

VISTARANEWS.COM


on

V Somanna
Koo

ತುಮಕೂರು: ಕೇಂದ್ರದ ಎನ್​ಡಿಎ ಸರ್ಕಾರದಲ್ಲಿ ಜಲಶಕ್ತಿ ರಾಜ್ಯ ಖಾತೆ ಸಚಿವರಾಗಿ ಅಧಿಕಾರ ವಹಿಸಿಕೊಂಡಿರುವ ವಿ. ಸೋಮಣ್ಣ (V Somanna) ಅವರು ತಮ್ಮ ಸ್ವಕ್ಷೇತ್ರ ತುಮಕೂರಿಗೆ ಶುಕ್ರವಾರ ಮೊದಲ ಬಾರಿ ಆಗಮಿಸಿದ್ದರು. ಈ ವೇಳೆ ಶಿಷ್ಟಾಚಾರ ಉಲ್ಲಂಘಿಸಿ ಸ್ಥಳದಲ್ಲಿ ಹಾಜರಿರದ ಜಿಲ್ಲಾಧಿಕಾರಿ ಹಾಗೂ ಮುಖ್ಯ ಕಾರ್ಯನಿರ್ವಹಣಾಧಿಕಾರಿಯನ್ನು ತರಾಟೆಗೆ ತೆಗೆದುಕೊಂಡರು.

ಸೋಮಣ್ಣ ಅವರದ್ದು ಪೂರ್ವ ನಿಗದಿತ ಭೇಟಿಯಾಗಿದ್ದರೂ ಜಿಲ್ಲಾಧಿಕಾರಿ ಶುಭಕಲ್ಯಾಣ್, ಸಿಇಓ ಪ್ರಭು ಅವರು ಸ್ಥಳದಲ್ಲಿ ಹಾಜರಿರಲಿಲ್ಲ. ಬದಲಾಗಿ ಸೋಮಣ್ಣ ಸ್ವಾಗತಕ್ಕೆ ಸಹಾಯಕ ಆಯುಕ್ತರನ್ನು ಕಳುಹಿಸಿದ್ದರು. ಅವರಿಬ್ಬರೂ ಜಿಲಾಸ್ತುವಾರಿ ಸಚಿವ ಜಿ.ಪರಮೇಶ್ವರ್ ಪ್ರವಾಸದ ಕಾರ್ಯಕ್ರಮಗಳಿಗೆ ಹಾಜರಾಗಲು ಹೋಗಿದ್ದರು. ಅವರಿಬ್ಬರ ನಡೆಯಿಂದ ಕೆಂಡಾಮಂಡಲರಾದ ಸೋಮಣ್ಣ ಫೋನ್ ಮೂಲಕವೇ ತರಾಟೆಗೆ ತೆಗೆದುಕೊಂಡಿದ್ದಾರೆ. ವಿವಾದ ಮಾಡಿಕೊಳ್ಳಲು ಹೋಗಬೇಡಿ. ಸ್ಥಳದಲ್ಲಿ ಹಾಜರಿದ್ದು ಜನರ ಸಮಸ್ಯೆಗೆ ಕಿವಿಯಾಗಬೇಕು. ಇಲ್ಲದಿದ್ದರೆ ಜನವೇ ಪಾಠ ಕಲಿಸುತ್ತಾರೆ ಎಂದು ಎಚ್ಚರಿಕೆ ನೀಡಿದರು.

ಕಲುಷಿತ ನೀರು ಸೇವನೆಯಿಂದ ವಾಂತಿ- ಭೇದಿ ಉಂಟಾಗಿ ಆಸ್ಪತ್ರೆಗೆ ದಾಖಲಾಗಿ ಮಧುಗಿರಿ ತಾಲೂಕಿನ ಸಂತ್ರಸ್ತರನ್ನು ಭೇಟಿಯಾದ ಸೋಮಣ್ಣ ಅವರು ಸಾಂತ್ವನ ಹೇಳಿದರು. ಈ ವೇಳೆಯೂ ಈ ವೇಳೆ ಸ್ಥಳದಲ್ಲಿ ಜಿಲ್ಲಾಧಿಕಾರಿ ಇಲ್ಲದಿರುವ ಬಗ್ಗೆ ಬೇಸರ ವ್ಯಕ್ತಪಡಿಸಿದರು. ಡಿಸಿ ಶುಭಕಲ್ಯಾಣ್, ಸಿಇಓ ಪ್ರಭುಗೆ ಪೋನ್ ಮಾಡಿ ವಿಚಾರಿಸಿದರು. ಪರಿಹಾರ ಹೇಳಲು ಇಲ್ಲಿ ಯಾರೂ ಇಲ್ಲ. ಜಿಲ್ಲಾ ಆರೋಗ್ಯ ಅಧಿಕಾರಿಗೂ ಕುಡಿಯುವ ನೀರಿನ ಸಮಸ್ಯೆಗೆ ಏನು ಸಂಬಂಧ. ನೀರು ಕೊಡೋರು ಯಾರು ಎಂದು ಪ್ರಶ್ನಿಸಿದರು.

ಜಿಲ್ಲಾಸ್ಪತ್ರೆಗೆ ನಾನು ಬಂದರೆ ಕೇಳುವುದಕ್ಕೆ ಗತಿಯಿಲ್ಲ. ನನಗೂ ನನ್ನದೇ ಆದಂತಹ ಜವಬ್ದಾರಿಯಿದೆ. ಇಲ್ಲಿ ಒಬ್ಬ ಅಧಿಕಾರಿಯೂ ಇಲ್ಲ. ಸ್ಥಳದಲ್ಲಿ ನೀವು ಇರಬೇಕಿತ್ತು. ಎಲ್ಲೆಲ್ಲಿಗೂ ಹೋಗಿ ನನಗೆ ಟೋಪಿ ಹಾಕಬೇಡಿ. ನಾನು ಎಂಪಿಯಾಗಿ ಆಸ್ಪತ್ರೆಗೆ ಬಂದಿದ್ದೇನೆ. ನಿಮ್ಮ ಯಾವ ಅಧಿಕಾರಿಯೂ ಇಲ್ಲ ಇಲ್ಲ. ಒಬ್ಬ ವೈದ್ಯರು ಇಲ್ಲ. ಜನರಿಗೆ ಮೋಸ ಮಾಡಿದರೆ ಅವರೂ ಪಾಠ ಕಲಿಸುತ್ತಾರೆ ಎಂದು ತರಾಟೆಗೆ ತೆಗೆದುಕೊಂಡರು.

ಸಂತ್ರಸ್ತರಿಗೆ ಸಾಂತ್ವನ

ಕಲುಷಿತ ನೀರು ಕುಡಿದು ಚನ್ನೆನಹಳ್ಳಿ ಗ್ರಾಮದ ಜನರಿಗೆ ಸಚಿವ ಸೋಮಣ್ಣ ಆಸ್ಪತ್ರೆಯಲ್ಲಿ ಸಾಂತ್ವನ ಹೇಳಿದರು. ತುಮಕೂರು ಜಿಲ್ಲಾಸ್ಪತ್ರೆಗೆ ಭೇಟಿ ನೀಡಿ ಚಿಕಿತ್ಸೆ ಪಡೆಯುತ್ತಿರುವ ಅಸ್ವಸ್ಥರಿಗೆ ಸಾಂತ್ವನ ಹೇಳಿದರು. ವಿ.ಸೋಮಣ್ಣಗೆ ಜಿಲ್ಲಾ ಆರೋಗ್ಯಧಿಕಾರಿ ಓ ಡಾ ಮಂಜುನಾಥ್, ಶಾಸಕ ಜಿ.ಬಿ ಜ್ಯೋತಿ ಗಣೇಶ್, ಸುರೇಶ್ ಗೌಡ ಸಾಥ್ ಕೊಟ್ಟರು.

ಸಿದ್ದಗಂಗಾ ಮಠಕ್ಕೆ ಭೇಟಿ: ತುಮಕೂರಿಗೆ ಆಗಮಿಸಿದ್ದ ಸೋಮಣ್ಣ ಸಿದ್ಧಗಂಗಾ ಮಠಕ್ಕೆ ಭೇಟಿ ನೀಡಿದರು. ಬಳಿಕ ಮಾತನಾಡಿದ ಅವರು, ನರೇಂದ್ರ ಮೋದಿ ಅವರು ನನ್ನನ್ನ ಎನ್ ಡಿಎ ಸರ್ಕಾರದ ಸಚಿವನನ್ನಾಗಿ ಮಾಡಿದ್ದಾರೆ, ಇದಕ್ಕಾಗಿ ಪ್ರಧಾನಿ ಹಾಗೂ ಗೃಹ ಸಚಿವರಿಗೆ ಧನ್ಯವಾದಗಳು. ಜೊತೆಗೆ ಮಾಜಿ ಪ್ರಧಾನಿ ದೇವೇಗೌಡರಿಗೆ ಧನ್ಯವಾದ ಹೇಳುತ್ತೇನೆ. ಇಂದು ತುಮಕೂರು ಜಿಲ್ಲೆಯ ಸ್ವಾಮಿಜಿಗಳನ್ನು ಭೇಟಿ ಮಾಡಿ ಆಶೀರ್ವಾದ ಪಡೆಯುತ್ತೇವೆ ಎಂದು ಹೇಳಿದರು.

ಮಧುಗಿರಿಯಲ್ಲಿ ಕಲುಷಿತ ನೀರು ಕುಡಿದು ಸಾವನಪ್ಪಿದ್ದಾರೆ. ಇದು ನಡೆಯಬಾರದಿತ್ತು. ಈ ಕುರಿತು ಜಿಲ್ಲಾ ಉಸ್ತುವಾರಿ ಸಚಿವರ ಜೊತೆ ಮಾತನಾಡಿದ್ದೇನೆ. ಜಿಲ್ಲಾಧಿಕಾರಿಯಿಂದ ವರದಿ ಪಡೆಯುತ್ತೇನೆ. ನಾನೂ ಜಿಲ್ಲಾಸ್ಪತ್ರೆಗೆ ಭೇಟಿ ಕೊಟ್ಟು ಆರೋಗ್ಯ ವಿಚಾರಿಸುವುದಾಗಿ ಹೇಳಿದರು.

ಇದನ್ನೂ ಓದಿ: CM Award : ಕಳಂಕಿತ ಡಿವೈಎಸ್ಪಿಜಾವೀದ್​ಗೆ ಸಿಎಂ ಪದಕ ನೀಡುವಂತೆ ಶಿಫಾರಸು; ಶಾಸಕ ಕಂದಕೂರ ವಿರೋಧ

ನನಗೆ ಕೊಟ್ಟ ಖಾತೆಯನ್ನು ಪ್ರಾಮಾಣಿಕವಾಗಿ ನಿಭಾಯಿಸುತ್ತೇನೆ. ಪ್ರಧಾನಿ ಮೋದಿ ಅವರ ನಿರೀಕ್ಷೆಯಂತೆ ಕೆಲಸ ಮಾಡುತ್ತೇನೆ. ಎನ್ ಡಿಎ ಒಕ್ಕೂಟದಿಂದ ರಾಷ್ಟ್ರದ ಎರಡು ಉಪಯುಕ್ತವಾದ ಜವಾಬ್ದಾರಿಗಳನ್ನು ನನಗೆ ನೀಡಿದ್ದಾರೆ. ಇಲಾಖೆಯನ್ನು ಅರ್ಥಮಾಡ್ಕೊಂಡು ನನ್ನ 45 ವರ್ಷದ ರಾಜಕೀಯ ಅನುಭವ ಬಳಸಿಕೊಂಡು ಕೆಲಸ ಮಾಡುವೆ ಎಂದು ಹೇಳಿದರು.

ಭಾನುವಾರ ಕಾರ್ಯಕರ್ತರ ಸಭೆ ಕರೆದಿದ್ದೇನೆ. ಎರಡು ಪಕ್ಷದ ಜಿಲ್ಲಾಧ್ಯಕ್ಷರು, ಪದಾಧಿಕಾರಿಗಳು, ಪ್ರಧಾನ ಕಾರ್ಯದರ್ಶಿಗಳ ಸಭೆ ಕರೆಯಲಾಗಿದೆ ಎಂದು ನುಡಿದರು.

Continue Reading

ಪ್ರಮುಖ ಸುದ್ದಿ

Medical Ethics : ಎದೆ ನೋವೆಂದು ಕ್ಲಿನಿಕ್​ಗೆ ಬಂದ ಯುವತಿ; ತಪಾಸಣೆ ನೆಪದಲ್ಲಿ ಅಂಗಿ ಬಿಚ್ಚಿಸಿ ಮುತ್ತಿಟ್ಟ ವೈದ್ಯ; ಕೇಸ್​ ದಾಖಲಿಸಲು ಕೋರ್ಟ್​ ಸೂಚನೆ

Medical Ethics: ಬೆಂಗಳೂರಿನ ಜರಗನಹಳ್ಳಿಯಲ್ಲಿರುವ ಆಸ್ಪತ್ರೆಯಲ್ಲಿ ಈ ‘ಅಧಿಕ ಪ್ರಸಂಗ ನಡೆದಿದೆ. ಎದೆ ನೋವಿನ ತಪಾಸಣೆ ನಡೆಸಲು ಬಂದ ಯುವತಿಯ ಒಳಉಡುಪುಗಳ ಬಿಚ್ಚಿಸಿದ್ದ ಆರೋಪಿ ವೈದ್ಯ , ಹೃದಯ ಬಡಿತ ಪರೀಕ್ಷೆ ಮಾಡುವ ನೆಪದಲ್ಲಿ ಸ್ತನಗಳ ಮೇಲೆ ಕೈಯಾಡಿಸಿದ್ದ. ಕೊನೆಗೆ ಮುತ್ತು ನೀಡಿದ್ದ. ತಕ್ಷಣ ಯುವತಿ ದೂರು ದಾಖಲಿಸಿದ್ದರು.

VISTARANEWS.COM


on

Medical Ethics
Koo

ಬೆಂಗಳೂರು: ವೈದ್ಯಕೀಯ ನೈತಿಕತೆ (Medical Ethics) ಮರೆತು ತನ್ನ ಬಳಿಕ ಚಿಕಿತ್ಸೆಗಾಗಿ ಬಂದಿದ್ದ ಯುವತಿಗೆ ತಪಾಸಣೆ ನೆಪದಲ್ಲಿ ಬಟ್ಟೆ ಹಾಗೂ ಒಳಉಡುಪುಗಳನ್ನು ಬಿಚ್ಚಿಸಿ ಸ್ತನಗಳ ಮೇಲೆ ಮುತ್ತಿಟ್ಟ ವೈದ್ಯನ ಮೇಲೆ ಕೇಸ್​ ದಾಖಲಿಸುವಂತೆ ಹೈಕೋರ್ಟ್​ ಹೇಳಿದೆ. ನಗರದ ಪುಟ್ಟೇನಹಳ್ಳಿ ಪೊಲೀಸ್ ಠಾಣೆಯಲ್ಲಿ ದಾಖಲಾದ ಪ್ರಕರಣವನ್ನು ರದ್ದು ಮಾಡುವಂತೆ ಆರೋಪಿ ವೈದ್ಯ ಸಲ್ಲಿಸಿದ್ದ ಅರ್ಜಿಯನ್ನು ರದ್ದು ಮಾಡಿದ ಕೋರ್ಟ್​, ಕ್ರಮ ಕೈಗೊಳ್ಳುವಂತೆ ಪೊಲೀಸರಿಗೆ ಆದೇಶಿಸಿದೆ. ಇದು ವೈದ್ಯಕೀಯ ನೈತಿಕತೆಯನ್ನು ಮರೆಯುವ ವೃತ್ತಿಪರರಿಗೆ ತಕ್ಕ ಪಾಠ ಎಂಬುದಾಗಿ ಕೋರ್ಟ್​​ ಅಭಿಪ್ರಾಯಪಟ್ಟಿದೆ.

ಬೆಂಗಳೂರಿನ ಜರಗನಹಳ್ಳಿಯಲ್ಲಿರುವ ಆಸ್ಪತ್ರೆಯಲ್ಲಿ ಈ ‘ಅಧಿಕ ಪ್ರಸಂಗ ನಡೆದಿದೆ. ಎದೆ ನೋವಿನ ತಪಾಸಣೆ ನಡೆಸಲು ಬಂದ ಯುವತಿಯ ಒಳಉಡುಪುಗಳ ಬಿಚ್ಚಿಸಿದ್ದ ಆರೋಪಿ ವೈದ್ಯ , ಹೃದಯ ಬಡಿತ ಪರೀಕ್ಷೆ ಮಾಡುವ ನೆಪದಲ್ಲಿ ಸ್ತನಗಳ ಮೇಲೆ ಕೈಯಾಡಿಸಿದ್ದ. ಕೊನೆಗೆ ಮುತ್ತು ನೀಡಿದ್ದ. ತಕ್ಷಣ ಯುವತಿ ದೂರು ದಾಖಲಿಸಿದ್ದರು. ಈ ಕ್ರಿಮಿನಲ್ ಮೊಕದ್ದಮೆ ದಾಖಲಾಗಿದ್ದು, ಇದನ್ನು ರದ್ದು ಮಾಡುವಂತೆ ಕೋರಿ ಅವರು ಹೈಕೋರ್ಟ್ ಮೆಟ್ಟಿಲೇರಿದ್ದರು. ಕೋರ್ಟ್​ ಅರ್ಜಿ ವಜಾ ಮಾಡುವ ಮೂಲಕ ಆರೋಪಿಯ ಬಂಧನವಾಗಲಿದೆ.

ಕೋರ್ಟ್​ ಅಭಿಪ್ರಾಯವೇನು?

ವೈದ್ಯರು ತನ್ನ ವೃತ್ತಿ ನೈತಿಕತೆ ಹಾಗೂ ಜನರ ನಂಬಿಕೆ ದುರುಪಯೋಗಪಡಿಸಿಕೊಂಡರೆ ವೈದ್ಯ ಮತ್ತು ರೋಗಿಯ ನಡುವಿನ ಸಂಬಂಧಕ್ಕೆ ಅಪಚಾರವಾಗುತ್ತದೆ. ರೋಗಿಯ ದೇಹ ವೈದ್ಯಕೀಯ ತಪಾಸಣೆಗೆ ಸೀಮಿತ. ದುರುಪಯೋಗ ಸಲ್ಲ. ಪ್ರಕರಣದಲ್ಲಿ ಸ್ಪಷ್ಟವಾದ ಲೈಂಗಿಕ ಪ್ರಚೋದನೆ ಕಂಡುಬಂದಿರುವುದರಿಂದ ವೈದ್ಯರ ವಿರುದ್ಧ ದಾಖಲಿಸಿದ ಕ್ರಿಮಿನಲ್ ಮೊಕದ್ದಮೆಯನ್ನು ರದ್ದುಗೊಳಿಸಲಾಗದು ಎಂದು ಕೋರ್ಟ್ ಹೇಳಿದೆ.

ಇದನ್ನೂ ಓದಿ: CM Award : ಕಳಂಕಿತ ಡಿವೈಎಸ್ಪಿಜಾವೀದ್​ಗೆ ಸಿಎಂ ಪದಕ ನೀಡುವಂತೆ ಶಿಫಾರಸು; ಶಾಸಕ ಕಂದಕೂರ ವಿರೋಧ

ವೈದ್ಯರು ದೂರುದಾರರ ಬಳಿ ಆಕೆಯ ಶರ್ಟ್ ಮತ್ತು ಒಳ ಉಡುಪು ಬಿಚ್ಚುವಂತೆ ಹೇಳಿದ್ದಾರೆ. ಪರೀಕ್ಷೆ ಮಾಡುವುದನ್ನು ಬಿಟ್ಟು ಸ್ತನದ ಮೇಲೆ ಮುತ್ತು ನೀಡಿದ ಆರೋಪ ಎದುರಿಸುತ್ತಿದ್ದಾರೆ. ವೈದ್ಯರ ಈ ನಡತೆ ಐಪಿಸಿಯ ಸೆಕ್ಷನ್ 354ಎ(1)(i) ಅಡಿ ಅಪರಾಧವೆಂದು ಪರಿಗಣಿಸಲ್ಪಡುವ ಅಂಶಗಳಾಗಿರುತ್ತದೆ ಎಂದು ನ್ಯಾಯಮೂರ್ತಿ ಎಂ ನಾಗಪ್ರಸನ್ನ ಅವರು ಹೇಳಿದ್ದಾರೆ.

ಏನಿದು ಪ್ರಕರಣ

ಸಂತ್ರಸ್ತೆ ಯುವತಿ ಎದೆನೋವಿನಿಂದ ಬಳಲುತ್ತಿದ್ದರು. ಅವರು ಜೆಪಿ ನಗರದ ಆಸ್ಪತ್ರೆಗೆ ಭೇಟಿ ನೀಡಿದ್ದರು. ಚಿಕಿತ್ಸೆ ನೀಡಿದ ನಂತರ ಇಸಿಜಿ ಮತ್ತು ಎದೆಯ ಎಕ್ಸ್-ರೇ ಪರೀಕ್ಷೆಗೆ ಒಳಗಾಗುವಂತೆ ವೈದ್ಯರು ಸೂಚಿಸಿದ್ದರು. ಅಲ್ಲದೆ, ವರದಿಗಳನ್ನು ವಾಟ್ಸಾಪ್‌ ನಲ್ಲಿ ಕಳುಹಿಸಲು ಹೇಳಿದ್ದರು. ವರದಿಗಳನ್ನು ನೋಡಿದ ವೈದ್ಯರು ಮಾರ್ಚ್ 21 ರಂದು ಮಧ್ಯಾಹ್ನ 2 ಗಂಟೆಗೆ ಜರಗನಹಳ್ಳಿಯಲ್ಲಿರುವ ತನ್ನ ಕ್ಲಿನಿಕ್‌ಗೆ ಭೇಟಿ ನೀಡುವಂತೆ ಹೇಳಿದ್ದರು.

ಅಂತೆಯೇ ಯುವತಿ ಕ್ಲಿನಿಕ್‌ಗೆ ಭೇಟಿ ನೀಡಿದಾಗ ವೈದ್ಯ ಮಾತ್ರ ಅಲ್ಲಿದ್ದರು. ತಪಾಸಣಾ ಕೋಣೆಗೆ ಕರೆದೊಯ್ದು ವೈದ್ಯರು ಮಲಗಲು ಹೇಳಿದ್ದರು. ಬಳಿಕ ಆಕೆಯ ಎದೆಯ ಮೇಲೆ ಸ್ಟೆತಸ್ಕೋಪ್ ಇಟ್ಟು ಹೃದಯ ಬಡಿತ ಪರೀಕ್ಷಿಸಲು ಪ್ರಾರಂಭಿಸಿದ್ದರು. ಮುಂದುವರಿದು ಆಕೆಯ ಬಳಿ ಶರ್ಟ್ ಮತ್ತು ಒಳ ಉಡುಪು ತೆಗೆಯಲು ಹೇಳಿದ್ದರು. ಐದು ನಿಮಿಷಗಳ ಪರೀಕ್ಷೆಯ ನಂತರ, ಕೈಗಳಿಂದ ಸ್ತನವನ್ನು ಸ್ಪರ್ಶಿಸಲು ಪ್ರಾರಂಭಿಸಿದ್ದರು. ಅಂತಿಮವಾಗಿ ಸ್ತನಕ್ಕೆ ಮುತ್ತಿಟ್ಟಿದ್ದಾರೆ ಎಂದು ಆರೋಪಿಸಲಾಗಿದೆ. ಗಾಬರಿಗೊಂಡ ಆಕೆ ಕ್ಲಿನಿಕ್‌ನಿಂದ ಓಡಿಬಂದು ಕುಟುಂಬ ಸದಸ್ಯರಿಗೆ ಮಾಹಿತಿ ನೀಡಿದ್ದರು. ಮರುದಿನ ಅವರು ಪುಟ್ಟೇನಹಳ್ಳಿ ಠಾಣೆಯಲ್ಲಿ ವೈದ್ಯರ ವಿರುದ್ಧ ದೂರು ದಾಖಲಿಸಿದ್ದರು.

Continue Reading

ಪ್ರಮುಖ ಸುದ್ದಿ

CM Award : ಕಳಂಕಿತ ಡಿವೈಎಸ್ಪಿಜಾವೀದ್​ಗೆ ಸಿಎಂ ಪದಕ ನೀಡುವಂತೆ ಶಿಫಾರಸು; ಶಾಸಕ ಕಂದಕೂರ ವಿರೋಧ

CM Award : 2023ರ ಸಿಎಂ ಪದಕಕ್ಕೆ ಡಿವೈಎಸ್​​ಪಿ ಇನಾಮ್ದಾರ್ ಹೆಸರನ್ನು ಹಿರಿಯ ಅಧಿಕಾರಿಗಳು ಶಿಫಾರಸು ಮಾಡಿರುವುದು ಸರಿಯಲ್ಲ. ಕಳಂಕಿತರಿಗೆ ಸಿಎಂ ಪದಕ ನೀಡಿದರೆ ಪ್ರಾಮಾಣಿಕ ಅಧಿಕಾರಿಗಳ ಆತ್ಮಸ್ಥೈರ್ಯ ಕುಗ್ಗಿಸಿದಂತಾಗುತ್ತದೆ ಎಂದು ಅವರು ಪತ್ರದಲ್ಲಿ ಬರೆದಿದ್ದಾರೆ

VISTARANEWS.COM


on

CM Award
Koo

ಬೆಂಗಳೂರು: ಚಿನ್ನ ಕಳ್ಳತನ ಪ್ರಕರಣದ ಆರೋಪ ಹೊತ್ತಿರುವ ಡಿವೈಎಸ್ಪಿ ಜಾವೀದ್​ ಇನಾಮ್ದಾರ್​ಗೆ ಮುಖ್ಯಮಂತ್ರಿಗಳ ಉತ್ತಮ ಸಾಧನೆ ಪ್ರಶಸ್ತಿ (CM Award) ನೀಡುವಂತೆ ಇಲಾಖೆಯ ಹಿರಿಯ ಅಧಿಕಾರಿಗಳು ಶಿಫಾರಸು ಮಾಡಿರುವುದು ಅಚ್ಚರಿಗೆ ಕಾರಣವಾಗಿದೆ. ಸುರಪುರ ಉಪವಿಭಾಗದ ಡಿವೈಎಸ್ಪಿಯಾಗಿ ಕರ್ತವ್ಯ ನಿರ್ವಹಿಸುತ್ತಿರುವ ಜಾವೀದ್ ಇನಾಮ್ದಾರ್ ವಿರುದ್ಧ ಚಿನ್ನ ಕಳ್ಳತನದ ಆರೋಪವಿದೆ. ಇಂಥವರಿಗೆ ಪ್ರಶಸ್ತಿ ಶಿಫಾರಸು ಮಾಡಿರುವುದು ಅಚ್ಚರಿಗೆ ಮೂಡಿಸಿದೆ ಎಂದು ಶಾಸಕ ಶರಣಗೌಡ ಕಂದಕೂರ ವಿರೋಧ ವ್ಯಕ್ತಪಡಿಸಿ ಸಿಎಂಗೆ ಪತ್ರ ಬರೆದಿದ್ದಾರೆ.

2023ರ ಸಿಎಂ ಪದಕಕ್ಕೆ ಡಿವೈಎಸ್​​ಪಿ ಇನಾಮ್ದಾರ್ ಹೆಸರನ್ನು ಹಿರಿಯ ಅಧಿಕಾರಿಗಳು ಶಿಫಾರಸು ಮಾಡಿರುವುದು ಸರಿಯಲ್ಲ. ಕಳಂಕಿತರಿಗೆ ಸಿಎಂ ಪದಕ ನೀಡಿದರೆ ಪ್ರಾಮಾಣಿಕ ಅಧಿಕಾರಿಗಳ ಆತ್ಮಸ್ಥೈರ್ಯ ಕುಗ್ಗಿಸಿದಂತಾಗುತ್ತದೆ ಎಂದು ಅವರು ಪತ್ರದಲ್ಲಿ ಬರೆದಿದ್ದಾರೆ

ಶಾಸಕ ಶರಣಗೌಡ ಕಂದಕೂರ ಪತ್ರದ ಸಾರ ಈ ಕೆಳಗೆ ಇದೆ

ಯಾದಗಿರಿ ಜಿಲ್ಲೆಯ ಸುರಪುರ ಪೊಲೀಸ್ ಉಪ ವಿಭಾಗದ ಉಪಾಧೀಕ್ಷರಾದ (ಡಿವೈಎಸ್‌ಪಿ) ಜಾವೀದ್​ ಇನಾಂದಾರ್​ ಇವರಿಗೆ 2023ನೇ ಸಾಲಿನ ಗೌರವಾನ್ವಿತ ಮುಖ್ಯಮಂತ್ರಿಗಳ ಪದಕಕ್ಕೆ ಈ ಭಾಗದ ಇಲಾಖೆಯ ಹಿರಿಯ ಅಧಿಕಾರಿಗಳು ಶಿಫಾರಸ್ಸು ಮಾಡಿದ್ದಾರೆ. ಮಾನ್ಯ ಪೊಲೀಸ್ ಮಹಾ ನಿರ್ದೇಶಕರಿಗೆ (ಡೈರೆಕ್ಟರ್ ಜನರಲ್ ಆಫ್ ಪೊಲೀಸ್) ಕಳುಹಿಸಿದ್ದಾರೆ ಎಂಬ ಮಾಹಿತಿಗಳು ಬಂದಿವೆ. ಜಾವೀದ್​ ಇನಾಂದಾರ್​ ಅವರ ವಿರುದ್ಧ ಭ್ರಷ್ಟಾಚಾರದ ಸೇರಿದಂತೆ ಹಲವಾರು ಆರೋಪಗಳಿವೆ. ಸರ್ಕಾರವು ಬಡವರಿಗೆ ನೀಡುವ ಆಹಾರಧಾನ್ಯಗಳನ್ನು ಕಾಳಸಂತೆಯಲ್ಲಿ ಮಾರಾಟ ಮಾಡುವಂತಹ ದಂಧೆಕೋರರ ಜೊತೆಗೆ ಶಾಮೀಲಾಗಿರುವ ಗಂಭೀರ ಆರೋಪಗಳಿವೆ. ಅವೆಲ್ಲವನ್ನೂ ಮರೆಮಾಚಿ ಪದಕಕ್ಕೆ ಶಿಫಾರಸು ಮಾಡಿದ್ದು ದುರದೃಷ್ಟಕರ ಎಂದು ಕಂದಕೂರ ಅವರು ಹೇಳಿದ್ದಾರೆ.

ಇದನ್ನೂ ಓದಿ: BS Yediyurappa : ಲೈಂಗಿಕ ಕಿರುಕುಳ ಕೇಸ್; ಹೈಕೋರ್ಟ್​ನಲ್ಲಿ ಇಂದು ಯಡಿಯೂರಪ್ಪಗೆ ಜಾಮೀನು ಸಿಗದಿದ್ದರೆ ಬಂಧನ

ಜಾವೀದ್​ ಇನಾಂದಾರ್​ ಅವರು ಈ ಹಿಂದೆ (2021ರಲ್ಲಿ) ಬೆಳಗಾವಿ ಜಿಲ್ಲೆ ಗೋಕಾಕ ಉಪ ವಿಭಾಗದ ಪೊಲೀಸ್ ಉಪಾಧೀಕ್ಷರಾಗಿದ್ದ ಸಂದರ್ಭದಲ್ಲಿ, ಹುಕ್ಕೇರಿ ತಾಲೂಕಿನ ಯಮಕನಮರಡಿ ಪೊಲೀಸ್ ಠಾಣೆಯಲ್ಲಿ ನಡೆದಿದ್ದ 4.9 ಕೆ.ಜಿ. ಚಿನ್ನದ ಕಳ್ಳತನ ಪ್ರಕರಣದಲ್ಲಿ ಭಾಗಿಯಾಗಿದ್ದವು. ಚಿನ್ನದ ಕಳ್ಳ ಸಾಗಣೆ ತಡೆಗಟ್ಟಬೇಕಾದ ಪೊಲೀಸ್ ಅಧಿಕಾರಿ ಕಳ್ಳರ ಜೊತೆ ಭಾಗಿಯಾಗಿ ಸುಮಾರು 4.9 ಕೆ.ಜಿಯಷ್ಟು ಚಿನ್ನ ಲಪಟಾಯಿಸಿದ್ದರು. ರಾಜ್ಯ ಸರ್ಕಾರ ಈ ಪ್ರಕರಣವನ್ನು ಸಿಐಡಿ ತನಿಖೆಗೆ ವಹಿಸಿದ್ದು ತನಿಖೆ ಕೊನೆಗೊಂಡಿಲ್ಲ. ಅಂದಿನ ಗೋಕಾಕ್​ ಡಿವೈಎಸ್‌ಪಿಯಾಗಿದ್ದ ಜಾವೀದ್​ ಇನಾಂದಾರ್​ ಅವರನ್ನು ಸರ್ಕಾರ ವರ್ಗಾವಣೆ ಮಾಡಿತ್ತು ಎಂದು ಕಂದಕೂರ ಅವರು ಪತ್ರದಲ್ಲಿ ಬರೆದಿದ್ದಾರೆ.

ಕಾಳಸಂತೆಯಲ್ಲಿ ಆಹಾರ ಧಾನ್ಯ ಮಾರಿದ ಶಹಾಪುರದ ಚಾಮನಾಳದ ಮಲ್ಲಿಕ್ ಎಂಬಾತನ ಜೊತೆ ಡಿವೈಎಸ್ಪಿ ಜಾವೀದ್​ ನಿಕಟ ಸಂಪರ್ಕ ಹೊಂದಿದ್ದಾರೆ. ಆರೋಪಿಗೆ ಖುದ್ದು ಡಿವೈಎಸ್‌ಪಿ ಜಾವೀದ್​ ಇನಾಂದಾರ್​​ ಸನ್ಮಾನ ಮಾಡಿ ಇಲಾಖೆಗೆ ಮಜುಗರ ತಂದಿದ್ದರು. ಅಕ್ಕಿ ಅಕ್ರಮ ಮಾರಾಟ ಪ್ರಕರಣದಲ್ಲಿ ಮಲ್ಲಿಕ್​ನನ್ನು ಪಾರು ಮಾಡಲು ಡಿವೈಎಸ್‌ಪಿ ಜಾವೀದ್​ ​ ಇನಾಂದಾರ್​ ಅವರು ಅಮಾಯಕ ವ್ಯಾಪಾರಿಗಳನ್ನು ಸಿಲುಕಿಸಿದ್ದರು. ಈ ಹಿಂದೆ ನಡೆದ ಅಧಿವೇಶನದಲ್ಲಿ ನಾನು ಇದನ್ನು ಸರ್ಕಾರದ ಗಮನಕ್ಕೆ ತಂದಿರುತ್ತೇನೆ ಎಂದು ಕಂದಕೂರ ಅವರ ಪತ್ರದಲ್ಲಿ ತಿಳಿಸಿದ್ದಾರೆ.

ಅವರ ಬಗ್ಗೆ ಹಿರಿಯ ಅಧಿಕಾರಿಗಳು ನೀಡಿರುವ ಶಿಫಾರಸು ಪತ್ರದಲ್ಲಿ ಎಫ್‌ಡಿಎ ಪರೀಕ್ಷೆಯಲ್ಲಿ ಬ್ಲೂಟೂತ್ ಆಕ್ರಮದ ಪ್ರಕರಣವನ್ನು ಜಾವೀದ್​ ಪತ್ತೆ ಹಚ್ಚಿದ್ದಾರೆ ಎಂದು ಬರೆಯಲಾಗಿದೆ. ವಾಸ್ತವದಲ್ಲಿ, ಕಲಬುರಗಿ ಹಿರಿಯ ಅಧಿಕಾರಿಗಳು ನೀಡಿದ ಮಾಹಿತಿ ಮೇರೆಗೆ ಈ ಪ್ರಕರಣ ಬಯಲಾಗಿದೆ. ಇನ್ನೂ ಅನೇಕ ಪ್ರಕರಣಗಳನ್ನು ಬಗೆ ಹರಿಸಿದ್ದಾರೆ ಎಂದು ಪತ್ರದಲ್ಲಿ ತಿಳಿಸಿರುವ ಅಂಶಗಳು ಬಹುತೇಕ ಸತ್ಯಕ್ಕೆ ದೂರವಾಗಿದೆ. ಈ ಅಧಿಕಾರಿಯ ವಿರುದ್ಧ ಕ್ರಮ ಕೈಗೊಳ್ಳುವ ಬದಲು ಮುಖ್ಯಮಂತ್ರಿ ಪದಕಕ್ಕೆ ಶಿಫಾರಸ್ಸು ಮಾಡುತ್ತಿರುವುದು ಪ್ರಾಮಾಣಿಕ ಅಧಿಕಾರಿಗಳನ್ನು ಕುಗ್ಗಿಸಿದಂತೆ ಎಂದು ಶಾಸಕರು ಹೇಳಿದ್ದಾರೆ.

Continue Reading

ದೇಶ

Priyanka Gandhi: ರಾಹುಲ್ ಗಾಂಧಿ ತೆರವು ಮಾಡುವ ವಯನಾಡ್‌ನಿಂದ ಪ್ರಿಯಾಂಕಾ ಗಾಂಧಿ ಸ್ಪರ್ಧೆ?

Priyanka Gandhi: ಈ ಬಾರಿಯ ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ನಾಯಕ ರಾಹುಲ್‌ ಗಾಂಧಿ ಅವರು ಉತ್ತರ ಪ್ರದೇಶದ ರಾಯ್‌ ಬರೇಲಿ ಮತ್ತು ಕೇರಳದ ವಯನಾಡು ಕ್ಷೇತ್ರದಿಂದ ಜಯ ಗಳಿಸಿದ್ದು, ಒಂದು ಕ್ಷೇತ್ರವನ್ನು ಬಿಟ್ಟು ಕೊಡಬೇಕಾದ ಅನಿವಾರ್ಯತೆ ಎದುರಾಗಿದೆ. ಅವರು ವಯನಾಡು ಕ್ಷೇತ್ರವನ್ನು ಬಿಟ್ಟು ಕೊಡಲಿದ್ದು, ಅಲ್ಲಿ ಅವರ ಸಹೋದರೆ ಪ್ರಿಯಾಂಕಾ ಗಾಂಧಿ ಸ್ಪರ್ಧಿಸುತ್ತಾರೆ ಎನ್ನುವ ವದಂತಿ ಹಬ್ಬಿದೆ.

VISTARANEWS.COM


on

Priyanka Gandhi
Koo

ತಿರುವನಂತಪುರಂ: ಈ ಬಾರಿಯ ಲೋಕಸಭಾ ಚುನಾವಣೆ (Lok Sabha polls)ಯಲ್ಲಿ ಕಾಂಗ್ರೆಸ್‌ ನಾಯಕಿ ಪ್ರಿಯಾಂಕಾ ಗಾಂಧಿ (Priyanka Gandhi) ಸ್ಪರ್ಧಿಸುತ್ತಾರೆ ಎನ್ನುವ ಎನ್ನುವ ನಿರೀಕ್ಷೆ ಇತ್ತು. ಸೋನಿಯಾ ಗಾಂಧಿ ತೆರವುಗೊಳಿಸಿದ್ದ ಉತ್ತರ ಪ್ರದೇಶದ ರಾಯ್‌ ಬರೇಲಿಯಲ್ಲಿ ಪ್ರಿಯಾಂಕಾ ಗಾಂಧಿ ಕಣಕ್ಕಿಳಿಯುತ್ತಾರೆ ಎನ್ನಲಾಗಿತ್ತು. ಆದರೆ ಅವರು ಎಲ್ಲರ ನಿರೀಕ್ಷೆಯನ್ನು ತಲೆ ಕೆಳಗಾಗಿಸಿ ಪ್ರಚಾರದಲ್ಲಿ ಮತ್ರ ತೊಡಗಿಸಿಕೊಂಡಿದ್ದರು. ಇತ್ತ ಕೇರಳದ ವಯನಾಡು ಮತ್ತು ರಾಯ್‌ ಬರೇಲಿಯಿಂದ ಸ್ಪರ್ಧಿಸಿದ್ದ ರಾಹುಲ್‌ ಗಾಂಧಿ (Rahul Gandhi) ಎರಡೂ ಕಡೆ ಜಯ ಗಳಿಸಿದ್ದಾರೆ. ಇದೀಗ ಅವರು ಒಂದು ಕಡೆ ತಮ್ಮ ಸ್ಥಾನವನ್ನು ಬಿಟ್ಟು ಕೊಡಬೇಕಿದೆ. ಮೂಲಗಳ ಪ್ರಕಾರ ಅವರು ವಯನಾಡು ಕ್ಷೇತ್ರವನ್ನು ತೊರೆಯಲಿದ್ದು, ಉಪಚುನಾವಣೆಯಲ್ಲಿ ಪ್ರಿಯಾಂಕಾ ಗಾಂಧಿ ಇಲ್ಲಿಂದ ಸ್ಪರ್ಧಿಸಲಿದ್ದಾರೆ ಎನ್ನಲಾಗಿದೆ.

ಕಾಂಗ್ರೆಸ್‌ನ ಭದ್ರಕೋಟೆ ಎನಿಸಿಕೊಂಡಿರುವ ರಾಯ್‌ ಬರೇಲಿ ಮತ್ತು ವಯನಾಡು ಎರಡೂ ಕಡೆ ರಾಹುಲ್‌ ಗಾಂಧಿ 3 ಲಕ್ಷಕ್ಕೂ ಅಧಿಕ ಮತಗಳಿಂದ ಜಯಭೇರಿ ಭಾರಿಸಿದ್ದಾರೆ. 2019ರಲ್ಲಿ ಉತ್ತರ ಪ್ರದೇಶದ ಅಮೇಥಿ ಮತ್ತು ವಯನಾಡಿನಲ್ಲಿ ಸ್ಪರ್ಧಿಸಿದ್ದ ಅವರು ಅಮೇಥಿಯಲ್ಲಿ ಬಿಜೆಪಿಯ ಸ್ಲೃತಿ ಇರಾನಿ ವಿರುದ್ಧ ಸೋತಿದ್ದರು. ವಯನಾಡಿನಲ್ಲಿ ಸತತ ಎರಡನೇ ಬಾರಿ ಜಯ ಗಳಿಸಿದ ಅವರು ಇದೀಗ ಅನಿವಾರ್ಯವಾಗಿ ಅಲ್ಲಿನ ಸ್ಥಾನವನ್ನು ತ್ಯಜಿಸಬೇಕಾಗಿದೆ. ಹೀಗಾಗಿ ಅಲ್ಲಿನ ಕಾಂಗ್ರೆಸ್‌ ಕಾರ್ಯಕರ್ತರು ಅವರ ಸಹೋದರಿ ಪ್ರಿಯಾಂಕಾ ಗಾಂಧಿ ಅವರನ್ನು ಕಣಕ್ಕಿಳಿಸಬೇಕು ಎಂದು ಆಗ್ರಹಿಸಿದ್ದಾರೆ.

ಸೂಚನೆ ನೀಡಿದ ರಾಹುಲ್‌ ಗಾಂಧಿ?

ಲೋಕಸಭಾ ಚುನಾವಣೆಯ ಬಗ್ಗೆ ಮಂಗಳವಾರ (ಜೂನ್‌ 11) ಮಾತನಾಡಿದ್ದ ರಾಹುಲ್‌ ಗಾಂಧಿ, ʼʼಒಂದು ವೇಳೆ ವಾರಣಾಸಿಯಲ್ಲಿ ತಮ್ಮ ಸಹೋದರಿ ಪ್ರಿಯಾಂಕಾ ಗಾಂಧಿ ವಿರುದ್ಧ ಸ್ಪರ್ಧಿಸಿದ್ದರೆ ಪ್ರಧಾನಿ ನರೇಂದ್ರ ಮೋದಿ ಅವರು 2-3 ಲಕ್ಷ ಮತಗಳ ಅಂತರಿಂದ ಸೋಲುತ್ತಿದ್ದರುʼʼ ಎಂದು ಹೇಳಿದ್ದರು. ಆ ಮೂಲಕ ಅವರು ಪ್ರಿಯಾಂಕಾ ಗಾಂಧಿ ಅವರ ಚೊಚ್ಚಲ ಸ್ಪರ್ಧೆಯ ಸುಳಿವು ನೀಡಿದ್ದರಾ ಎನ್ನುವ ಸಂಶಯ ಮೂಡಿದೆ.

ಇದೇ ಮೊದಲಲ್ಲ

ಹಾಗೆ ನೋಡಿದರೆ ಪ್ರಿಯಾಂಕಾ ಗಾಂಧಿ ಚುನಾವಣೆಯಲ್ಲಿ ಸ್ಪರ್ಧಿಸುತ್ತಾರೆ ಎನ್ನುವ ವದಂತಿ ಹಬ್ಬುತ್ತಿರುವುದು ಇದು ಮೊದಲ ಸಲವೇನಲ್ಲ. 2019ರ ಲೋಕಸಭಾ ಚುನಾವಣೆಯಿಂದಲೂ ಅವರು ಕಣಕ್ಕಿಳಿಯುತ್ತಾರೆ ಎಂಬ ವದಂತಿ ಇದೆ. ಆಗ ಬಿಜೆಪಿ ಅಲೆಯನ್ನು ತಡೆಯಲು ಕಾಂಗ್ರೆಸ್ ವಾರಣಾಸಿ ಕ್ಷೇತ್ರದಿಂದ ಪ್ರಿಯಾಂಕಾ ಗಾಂಧಿ ಅವರನ್ನು ಕಣಕ್ಕಿಳಿಸಲಿದೆ ಎಂದೇ ಊಹಿಸಲಾಗಿತ್ತು. ಆದರೆ ಅವರು ಸ್ಪರ್ಧಿಸಿರಲಿಲ್ಲ.

ಬಳಿಕ 2022ರ ಉತ್ತರ ಪ್ರದೇಶದ ವಿಧಾನಸಭಾ ಚುನಾವಣೆಯ ಸಂದರ್ಭದಲ್ಲಿಯೂ ಪ್ರಿಯಾಂಕಾ ಗಾಂಧಿ ಹೆಸರು ಮತ್ತೆ ಚಾಲ್ತಿಗೆ ಬಂತು. ಅವರು ಮುಖ್ಯಮಂತ್ರಿ ಅಭ್ಯರ್ಥಿಯಾಗಲಿದ್ದಾರೆ ಎನ್ನಲಾಗಿತ್ತು. ಆಗಲೂ ಕಾಂಗ್ರೆಸ್‌ ಕಾರ್ಯಕರ್ತರಿಗೆ ನಿರಾಸೆಯೇ ಎದುರಾಗಿತ್ತು. ಇನ್ನು 2024ರ ಲೋಕಸಭಾ ಚುನಾವಣೆ ಸಂದರ್ಭದಲ್ಲಿ ಸೋನಿಯಾ ಗಾಂಧಿ ರಾಯ್‌ ಬರೇಲಿ ಕ್ಷೇತ್ರವನ್ನು ತೊರೆದು ರಾಜ್ಯಸಭೆಯತ್ತ ಮುಖ ಮಾಡಿದರು. ಆಗಲಾದರೂ ರಾಯ್‌ ಬರೇಲಿಯಲ್ಲಿ ಪ್ರಿಯಾಂಕಾ ಗಾಂಧಿ ಸ್ಪರ್ಧಿಸುತ್ತಾರೆ ಎನ್ನುವ ನಿರೀಕ್ಷೆ ಇತ್ತು. ಜತೆಗೆ ಅಮೇಥಿಯಲ್ಲಿ ಸ್ಮೃತಿ ಇರಾನಿ ವಿರುದ್ಧ ಸ್ಪರ್ಧಿಸುತ್ತಾರೆ ಎಂದೂ ಹೇಳಲಾಗಿತ್ತು. ಆದರೆ ಕೊನೆಯ ಕ್ಷಣದಲ್ಲಿ ರಾಯ್‌ ಬರೇಲಿಯಿಂದ ರಾಹುಲ್‌ ಗಾಂಧಿ ಕಣಕ್ಕಿಳಿದರು. ಅಮೇಥಿಯಲ್ಲಿ ಕಾಂಗ್ರೆಸ್‌ನಿಂದ ಕಿಶೋರಿ ಲಾಲ್‌ ಶರ್ಮಾ ಸ್ಪರ್ಧಿಸಿ ಜಯ ಗಳಿಸಿದರು.

ಇದನ್ನೂ ಓದಿ: Rahul Gandhi: ನನ್ನ ಮೇಲೆ ಮೋದಿಗಿರುವಷ್ಟು ದೇವರ ಕೃಪೆ ಇಲ್ಲ ಎಂದ ರಾಹುಲ್‌ ಗಾಂಧಿ; ಏಕಿಂಥ ಮಾತು?

ಒಂದು ವೇಳೆ ರಾಹುಲ್‌ ಗಾಂಧಿ ವಯನಾಡು ಕ್ಷೇತ್ರವನ್ನು ತ್ಯಜಿಸುವುದೇ ಆಗಿದ್ದರೆ ಉಪ ಚುನಾವಣೆಯಲ್ಲಿ ಪ್ರಿಯಾಂಕಾ ಗಾಂಧಿ ಅವರನ್ನು ಕಣಕ್ಕಿಳಿಸಬೇಕು ಎಂದು ಅಲ್ಲಿನ ಕಾಂಗ್ರೆಸ್‌ ಕಾರ್ಯಕರ್ತರು ಬ್ಯಾನರ್‌ ಅಳವಡಿಸಿ ಆಗ್ರಹಿಸಿದ್ದಾರೆ. ಒಟ್ಟಿನಲ್ಲಿ ಈಗಲಾದರೂ ಪ್ರಿಯಾಂಕಾ ಗಾಂಧಿ ಕಣಕ್ಕಿಳಿಯುತ್ತಾರಾ ಎನ್ನುವ ಪ್ರಶ್ನೆ ಮೂಡಿದ್ದು, ಸದ್ಯದಲ್ಲೇ ಉತ್ತರ ಸಿಗುವ ನಿರೀಕ್ಷೆ ಇದೆ.

Continue Reading
Advertisement
V Somanna
ಪ್ರಮುಖ ಸುದ್ದಿ5 mins ago

V Somanna : ತಮ್ಮನ್ನು ಕಡೆಗಣಿಸಿದ ಜಿಲ್ಲಾಧಿಕಾರಿ, ಸಿಇಒಗೆ ಕೇಂದ್ರ ಸಚಿವ ಸೋಮಣ್ಣ ತರಾಟೆ

Self Harming
ಉತ್ತರ ಕನ್ನಡ8 mins ago

Self Harming : ಪಿಎಸ್‌ಐ ಕಿರುಕುಳ; ಕುಡಿದ ಅಮಲಿನಲ್ಲಿ ಠಾಣೆ ಎದುರೇ ಪೆಟ್ರೋಲ್‌ ಸುರಿದು ಬೆಂಕಿ ಹಚ್ಚಿಕೊಂಡ

Shakib Al Hasan
ಕ್ರೀಡೆ27 mins ago

Shakib Al Hasan: ನಿವೃತ್ತಿಯಾಗಿ ಎಂದು ಲೇವಡಿ ಮಾಡಿದ ಸೆಹವಾಗ್​ಗೆ ತಕ್ಕ ತಿರುಗೇಟು ನೀಡಿದ ಬಾಂಗ್ಲಾ ನಾಯಕ

Farmer Death
ಮೈಸೂರು35 mins ago

Farmer Death : ಸಾಲದ ಶೂಲಕ್ಕೆ ಮನನೊಂದ ರೈತ; ಕೆರೆಗೆ ಹಾರಿ ಆತ್ಮಹತ್ಯೆ

Gold Rate Today
ಚಿನ್ನದ ದರ36 mins ago

Gold Rate Today: ಆಭರಣ ಖರೀದಿಸಲು ಇದು ಸಕಾಲ; ಚಿನ್ನದ ಬೆಲೆ ಇಳಿಕೆ

Duniya Vijay wife Nagarathna Facebook Post After Court Order
ಸ್ಯಾಂಡಲ್ ವುಡ್50 mins ago

Duniya Vijay: ಗಂಡ ಕೈಬಿಟ್ರೂ, ನಂಬಿದ ದೇವರು ಕೈ ಬಿಡಲಿಲ್ಲ: ದುನಿಯಾ ವಿಜಯ್ ಪತ್ನಿ ನಾಗರತ್ನ

Actress Bbk 10 Siri Marriage Video Goes Viral
ಬಿಗ್ ಬಾಸ್59 mins ago

Actress Siri: ಸಿಂಪಲ್‌ ಆಗಿ ವೈವಾಹಿಕ ಜೀವನಕ್ಕೆ ಕಾಲಿಟ್ಟ `ಬಿಗ್‌ ಬಾಸ್‌ ಕನ್ನಡ 10′ ಸ್ಪರ್ಧಿ, ನಟಿ ಸಿರಿ!

Self Harming
ಕ್ರೈಂ1 hour ago

Self Harming : ಒಂದೇ ದಿನ ನಾಲ್ವರು ಗೃಹಿಣಿಯರ ಆತ್ಮಹತ್ಯೆ; ಅವರಲ್ಲಿಬ್ಬರು ಯೋಧರ ಪತ್ನಿಯರು

Euro Cup 2024
ಕ್ರೀಡೆ1 hour ago

Euro Cup 2024: ಇಂದಿನಿಂದ ಯುರೋ ಕಪ್ ಟೂರ್ನಿ; ಜರ್ಮನಿ-ಸ್ಕಾಟ್ಲೆಂಡ್ ನಡುವೆ ಮೊದಲ ಪಂದ್ಯ

Medical Ethics
ಪ್ರಮುಖ ಸುದ್ದಿ1 hour ago

Medical Ethics : ಎದೆ ನೋವೆಂದು ಕ್ಲಿನಿಕ್​ಗೆ ಬಂದ ಯುವತಿ; ತಪಾಸಣೆ ನೆಪದಲ್ಲಿ ಅಂಗಿ ಬಿಚ್ಚಿಸಿ ಮುತ್ತಿಟ್ಟ ವೈದ್ಯ; ಕೇಸ್​ ದಾಖಲಿಸಲು ಕೋರ್ಟ್​ ಸೂಚನೆ

Sharmitha Gowda in bikini
ಕಿರುತೆರೆ8 months ago

Geetha Serial Kannada: ನಿದ್ದೆ ಕದ್ದ ಚೋರಿ! ನಟಿ `ಭಾನುಮತಿ’ ಹಾಟ್‌ ಪೋಟೊಗಳಿಗೆ ಫ್ಯಾನ್ಸ್ ಫುಲ್ ಫಿದಾ

Kannada Serials
ಕಿರುತೆರೆ8 months ago

Kannada Serials TRP: 2ನೇ ಸ್ಥಾನದಲ್ಲಿ 2 ಧಾರಾವಾಹಿಗಳು; ಟಿಆರ್‌ಪಿ ರೇಸ್‌ನಲ್ಲಿಲ್ಲ ಭಾಗ್ಯಲಕ್ಷ್ಮೀ!

Bigg Boss- Saregamapa 20 average TRP
ಕಿರುತೆರೆ8 months ago

Kannada Serials TRP: ಏಳನೇ ಸ್ಥಾನಕ್ಕೆ ʻಅಮೃತಧಾರೆʼ ಕುಸಿತ; ಬಿಗ್‌ ಬಾಸ್‌-ಸರಿಗಮಪ ಟಿಆರ್‌ಪಿ ಎಷ್ಟು?

galipata neetu
ಕಿರುತೆರೆ7 months ago

Kanyadana Serial: ಕಿರುತೆರೆಗೆ ಮತ್ತೆ ಎಂಟ್ರಿ ಕೊಟ್ಟ ʻಗಾಳಿಪಟʼ ಖ್ಯಾತಿಯ ʻನೀತುʼ!

Kannada Serials
ಕಿರುತೆರೆ9 months ago

Kannada Serials TRP: ನಾಲ್ಕನೇ ಸ್ಥಾನಕ್ಕೆ ಕುಸಿತ ಕಂಡ ʻಸೀತಾ ರಾಮʼ; ಟಿಆರ್‌ಪಿ ರೇಸ್‌ಗೆ ʻಭಾಗ್ಯಲಕ್ಷ್ಮಿʼ ಬ್ಯಾಕ್‌!

Kannada Serials
ಕಿರುತೆರೆ8 months ago

Kannada Serials TRP: ಟಿಆರ್‌ಪಿಯಲ್ಲಿ ʻಭಾಗ್ಯಲಕ್ಷ್ಮೀʼ ಹವಾ; ʻಪುಟ್ಟಕ್ಕನ ಮಕ್ಕಳುʼ ಧಾರಾವಾಹಿಗೆ ಸಂಕಷ್ಟ!

Bigg Boss' dominates TRP; Sita Rama fell to the sixth position
ಕಿರುತೆರೆ8 months ago

Kannada Serials TRP: ಟಿಆರ್‌ಪಿಯಲ್ಲಿ ʻಬಿಗ್ ಬಾಸ್ʼದೇ ಮೇಲುಗೈ; 6ನೇ ಸ್ಥಾನಕ್ಕೆ ಕುಸಿದ ʻಸೀತಾ ರಾಮʼ

geetha serial Dhanush gowda engagement
ಕಿರುತೆರೆ6 months ago

Dhanush Gowda: ಗೀತಾ ಧಾರಾವಾಹಿ ನಟನ ನಿಶ್ಚಿತಾರ್ಥ; ಭವ್ಯಾಳ ಕಮೆಂಟ್‌ ಬಾಕ್ಸ್‌ ಆಫ್‌!

varun
ಕಿರುತೆರೆ7 months ago

Brindavana Serial: ʼಬೃಂದಾವನʼ ಧಾರಾವಾಹಿಯಲ್ಲಿ ದೊಡ್ಡ ಟ್ವಿಸ್ಟ್‌; ಪ್ರಮುಖ ಪಾತ್ರಧಾರಿಯೇ ಬದಲು

Kannada Serials
ಕಿರುತೆರೆ9 months ago

Kannada Serials TRP: ಟಿಆರ್‌ಪಿಯಲ್ಲಿ ಏರಿಕೆ ಕಂಡ ʻಅಮೃತಧಾರೆʼ; ʻಗಟ್ಟಿಮೇಳʼಕ್ಕೆ ನಾಲ್ಕನೇ ಸ್ಥಾನ!

karnataka weather Forecast
ಮಳೆ3 days ago

Karnataka Weather : ಭಾರಿ ಮಳೆಗೆ ಗುಡ್ಡದಿಂದ ಉರುಳಿ ಬಿದ್ದ ಬಂಡೆಗಲ್ಲು; ಬೆಂಗಳೂರಲ್ಲೂ ಸಂಜೆ ವರ್ಷಧಾರೆ

actor Darshan
ಚಿತ್ರದುರ್ಗ3 days ago

Actor Darshan: ರೇಣುಕಾ ಸ್ವಾಮಿ ಕೊಲೆ ಕೇಸ್‌ನಲ್ಲಿ ದರ್ಶನ್‌ ಅರೆಸ್ಟ್‌; ಪ್ರಕರಣವನ್ನು ಸಿಬಿಐಗೆ ವಹಿಸಲು ಒತ್ತಾಯ

Actor Darshan gets a series of questions from the police
ಸಿನಿಮಾ3 days ago

Actor Darshan : ಪವಿತ್ರಗೌಡ ಬಗ್ಗೆ ಪೋಸ್ಟ್‌ ಮಾಡಿದ್ರೆ ನಿಮಗ್ಯಾಕೆ ಕೋಪ? ದರ್ಶನ್‌ಗೆ ಪೊಲೀಸರ ಪ್ರಶ್ನೆಗಳ ಸುರಿಮಳೆ

Actor Darshan
ಸಿನಿಮಾ3 days ago

Actor Darshan : ದರ್ಶನ್‌ ಜೈಲಿಗೆ ಹೋಗುತ್ತಿರುವುದು ಇದೇ ಮೊದಲಲ್ಲ; ನಟನ ಮೇಲಿವೆ ಹತ್ತಾರು ಕೇಸ್‌ಗಳು!

Saptami Gowda
ಸಿನಿಮಾ3 days ago

Saptami Gowda : ಯುವ ಪತ್ನಿ ಶ್ರೀದೇವಿ ವಿರುದ್ಧ ಮಾನಹಾನಿ ಕೇಸ್; ಕಾನೂನು ಹೋರಾಟಕ್ಕೆ ಮುಂದಾದ ನಟಿ ಸಪ್ತಮಿ ಗೌಡ!

Karnataka weather Forecast
ಮಳೆ4 days ago

Karnataka Weather : ಭಾರಿ ಮಳೆಗೆ ಮನೆ ಗೋಡೆ ಕುಸಿದು ಎಮ್ಮೆಗಳು ಸಾವು; ಆಕಳಿನ ಜೀವ ತೆಗೆದ ವಿದ್ಯುತ್‌ ತಂತಿ

Karnataka weather Forecast
ಮಳೆ7 days ago

Karnataka weather : ಮಳೆಯಲ್ಲೆ ತಪಸ್ಸಿಗೆ ಕುಳಿತ ವೃದ್ಧ; ಇನ್ನೊಂದು ವಾರ ನಾನ್‌ ಸ್ಟಾಪ್‌ ವರುಣನ ಅಬ್ಬರ

Sigandur launch
ಶಿವಮೊಗ್ಗ7 days ago

Sigandur launch: ಸಿಗಂದೂರು ಲಾಂಚ್‌ನಲ್ಲಿ ಭಾರಿ ವಾಹನಗಳಿಗೆ ನಿರ್ಬಂಧ

Karnataka Rain
ಮಳೆ1 week ago

Karnataka Rain : ಭಾರಿ ಮಳೆಗೆ ಮರ ಬಿದ್ದು ಮೇಕೆಗಳು ಸಾವು; ಸಿಡಿಲಿಗೆ ಎಲೆಕ್ಟ್ರಿಕ್‌ ಅಂಗಡಿ ಸುಟ್ಟು ಭಸ್ಮ

Lok Sabha Election Result 2024 Live
ದೇಶ1 week ago

Lok Sabha Election Result 2024 Live: ಲೋಕಸಭೆ ಚುನಾವಣೆ ಫಲಿತಾಂಶದ ಲೈವ್‌ ಇಲ್ಲಿ ವೀಕ್ಷಿಸಿ

ಟ್ರೆಂಡಿಂಗ್‌