state and centre tussle continues regarding congress guarantee annabhagya schemeCongress Guarantee: ಹೋದ ದಾರಿಗೆ ಸುಂಕವಿಲ್ಲ ಸಿದ್ದರಾಮಯ್ಯ!: ಅಕ್ಕಿಗಾಗಿ ತುಳಿದ ಸಂಘರ್ಷದ ಮಾರ್ಗವೇ ಮುಳುವಾಯಿತೇ? - Vistara News

ಕರ್ನಾಟಕ

Congress Guarantee: ಹೋದ ದಾರಿಗೆ ಸುಂಕವಿಲ್ಲ ಸಿದ್ದರಾಮಯ್ಯ!: ಅಕ್ಕಿಗಾಗಿ ತುಳಿದ ಸಂಘರ್ಷದ ಮಾರ್ಗವೇ ಮುಳುವಾಯಿತೇ?

ಜುಲೈ 1ರಿಂದ ಅನ್ನಭಾಗ್ಯ ಯೋಜನೆಯನ್ನು ಜಾರಿ ಮಾಡುವುದಾಗಿ ಸಿದ್ದರಾಮಯ್ಯ ಘೋಷಣೆ ಮಾಡಿದ್ದರು. ಆದರೆ ಇದೀಗ ಉಂಟಾಗಿರುವ ಗೊಂದಲದಿಂದ ಅದು ಸಾಧ್ಯವಿಲ್ಲ ಎನ್ನಲಾಗುತ್ತಿದೆ.

VISTARANEWS.COM


on

ಮಹತ್ವದ, ಕುತೂಹಲಕರ ಸುದ್ದಿಗಾಗಿ ಫಾಲೊ ಮಾಡಿ
Koo

ಬೆಂಗಳೂರು: ಚುನಾವಣೆಗೂ ಮುನ್ನ ಘೋಷಿಸಿದ್ದ ಐದು ಗ್ಯಾರಂಟಿಗಳಲ್ಲೊಂದಾದ ಅನ್ನ ಭಾಗ್ಯ ಯೋಜನೆಯು ರಾಜ್ಯ ಸರ್ಕಾರಕ್ಕೆ ಕಗ್ಗಂಟಾಗಿ ಪರಿಣಮಿಸಿದೆ. ಎಲ್ಲವೂ ಸುಸೂತ್ರವಾಗಿ ನಡೆಯುತ್ತಿದೆ ಎನ್ನುತ್ತಿರುವಾಗಲೇ ಎಫ್‌ಸಿಐಗೆ ಕೇಂದ್ರ ಸರ್ಕಾರ ಬರೆದ ಪತ್ರವು ಯೋಜನೆಗೆ ಸಂಕಷ್ಟ ತಂದೊಡ್ಡಿದೆ. ಇದೇ ವೇಳೆ ರಾಜ್ಯ ಸರ್ಕಾರವು ಅನುಸರಿಸಿದ ಸಂಘರ್ಷದ ಮಾರ್ಗದಿಂದಾಗಿ ಪರಿಸ್ಥಿತಿ ಮತ್ತಷ್ಟು ಬಿಗಡಾಯಿಸಿತೇ ಎಂಬ ಮಾತುಗಳು ಕೇಳಿಬರುತ್ತಿವೆ.

ಅನ್ನಭಾಗ್ಯ ಯೋಜನೆಯನ್ನು ಜುಲೈ 1 ರಿಂದ ಜಾರಿ ಮಾಡುವುದಾಗಿ ಸಿದ್ದರಾಮಯ್ಯ ಘೋಷಣೆ ಮಾಡಿದ್ದರು. ಅದಕ್ಕಾಗಿ ಕೇಂದ್ರ ಸರ್ಕಾರದ ವ್ಯಾಪ್ತಿಯ ಭಾರತೀಯ ಆಹಾರ ನಿಗಮವನ್ನೂ(ಎಫ್‌ಸಿಐ) ಸಂಪರ್ಕಿಸಿದ್ದರು. ರಾಜ್ಯದ ಅಗತ್ಯಕ್ಕೆ ತಕ್ಕಷ್ಟು ಅಕ್ಕಿ ನೀಡುವುದಾಗಿ ಎಫ್‌ಸಿಐ ಕೂಡ ಒಪ್ಪಿಗೆ ನೀಡಿತ್ತು. ಆದರೆ ಮಾರನೆಯ ದಿನವೇ ಎಫ್‌ಸಿಐಗೆ ಪತ್ರ ಬರೆದಿದ್ದ ಕೇಂದ್ರ ಸರ್ಕಾರ, ಮಾರುಕಟ್ಟೆಯಲ್ಲಿ ಅಕ್ಕಿ ಹಾಗೂ ಗೋಧೀಯ ದರ ಹೆಚ್ಚಾಗುತ್ತಿದೆ. ಇದನ್ನು ನಿಯಂತ್ರಿಸುವ ಸಲುವಾಗಿ ಮುಕ್ತ ಮಾರುಕಟ್ಟೆಯಲ್ಲಿ ಹರಾಜು ಮಾಡಲು ಆರಂಭಿಸಿ. ಹಾಗೂ ರಾಜ್ಯಗಳಿಗೆ ನೀಡುತ್ತಿರುವ ಅಕ್ಕಿಯನ್ನಯ ಸ್ಥಗಿತಗೊಳಿಸಿ ಎಂದು ಆದೇಶಿಸಿತ್ತು. ರಾಜ್ಯಗಳಿಗೆ ನೇರವಾಗಿ ಅಕ್ಕಿ ಕೊಡಬೇಡಿ ಎಂದು ಕೇಂದ್ರ ಹೇಳಿತ್ತಾದರೂ ಮುಕ್ತ ಮಾರುಕಟ್ಟೆಯಲ್ಲಿ ಹರಾಜಿನಲ್ಲಿ ಭಾಗವಹಿಸಿ ಅಕ್ಕಿ ಖರೀದಿಸುವ ಅವಕಾಶ ರಾಜ್ಯ ಸರ್ಕಾರಕ್ಕೆ ಈಗಲೂ ಇದೆ.

ಸಂಘರ್ಷದ ಮಾರ್ಗ
ಎಫ್‌ಸಿಐನಿಂದ ಅಕ್ಕಿ ನಿರಾಕರಣೆ ಆದ ಕೂಡಲೆ ಕೇಂದ್ರ ಸರ್ಕಾರವನ್ನು ಸಂಪರ್ಕಿಸಿ ಪರಿಸ್ಥಿತಿ ತಿಳಿಗೊಳಿಸಬಹುದಿತ್ತು. ಆದರೆ ಸಿದ್ದರಾಮಯ್ಯ ಅವರು ನೇರವಾಗಿ ಕೇಂದ್ರ ಸರ್ಕಾರದ ವಿರುದ್ಧ ವಾಗ್ದಾಳಿ ಆರಂಭಿಸಿದರು. ಕೇಂದ್ರ ಸರ್ಕಾರವು ಅಕ್ಕಿ ವಿಚಾರದಲ್ಲಿ ರಾಜಕೀಯ ಮಾಡುತ್ತಿದೆ. ಧ್ವೇಷದ ರಾಜಕಾರಣ ಮಾಡುತ್ತಿದೆ ಎಂದು ಹರಿಹಾಯ್ದರು. ಆನಂತರದಲ್ಲಿ ತೆಲಂಗಾಣ, ಛತ್ತೀಸ್‌ಗಢ ಸೇರಿ ಕೆಲ ರಾಜ್ಯಗಳನ್ನು ಸಂಪರ್ಕಿಸಲಾಯಿತು. ಆದರೆ ರಾಜ್ಯಗಳು ಅಷ್ಟು ಪ್ರಮಾಣದ ಅಕ್ಕಿಯನ್ನು ಪ್ರತಿ ತಿಂಗಳು ಒದಗಿಸುವ ಬದ್ಧತೆಯನ್ನು ತೋರುವುದು ಕಷ್ಟವಾದ್ಧರಿಂದ ಮೀನಮೇಷ ಎಣಿಸುತ್ತಿವೆ. ಇನ್ನು ಕೇಂದ್ರ ಸರ್ಕಾರದ ವ್ಯಾಪ್ತಿಯ ಇನ್ನಿತರೆ ಏಜೆನ್ಸಿಗಳಾದ ನಾಫೇಡ್‌ ಸೇರಿ ಅನೇಕ ಕಡೆ ರಾಜ್ಯ ಸರ್ಕಾರ ಮಾತುಕತೆ ನಡೆಸಿದೆ. ಆದರೆ ಅಲ್ಲಿಂದಲೂ ಇಲ್ಲಿವರೆಗೆ ಗ್ಯಾರಂಟಿ ಸಿಕ್ಕಿಲ್ಲ.

ಇದೆಲ್ಲದರ ನಂತರ ಕೇಂದ್ರ ಆಹಾರ ಸಚಿವ ಪೀಯೂಷ್‌ ಗೋಯೆಲ್‌ ಅವರನ್ನು ಭೇಟಿ ಮಾಡಲು ಆಹಾರ ಮತ್ತು ನಾಗರಿಕ ಸರಬರಾಜು ಸಚಿವ ಕೆ.ಎಚ್‌. ಮುನಿಯಪ್ಪ ತೆರಳಿದ್ದಾರೆ. ಮಂಗಳವಾರವಷ್ಟೆ ಜವಳಿ ಸಚಿವ ಡಾ. ಶಿವಾನಂದ ಪಾಟೀಲ್‌ ಭೇಟಿಗೆ ಅವಕಾಶ ನೀಡಿದ್ದ ಪೀಯೂಷ್‌ ಗೋಯೆಲ್‌, ಮೂರು ದಿನವಾದರೂ ಮುನಿಯಪ್ಪ ಅವರನ್ನು ಭೇಟಿ ಮಾಡಿಲ್ಲ. ಬುಧವಾರ ಬೆಳಗ್ಗೆ ರಾಜ್ಯ ಸಚಿವರನ್ನು ಭೇಟಿ ಮಾಡಲು ಸಮಯ ನಿಗದಿಯಾಗಿತ್ತಾದರೂ ಅದು ನಂತರದಲ್ಲಿ ರದ್ದಾಗಿದೆ. ಇದರಿಂದ ಮುನಿಯಪ್ಪ ವ್ಯಘ್ರರಾಗಿದ್ದಾರೆ. ಕೇಂದ್ರ ಸಚಿವರು ಭೇಟಿಗೂ ಅವಕಾಶ ನೀಡದೆ ರಾಜ್ಯದ ವಿರುದ್ಧ ಧ್ವೇಷದ ರಾಜಕಾರಣ ಮಾಡುತ್ತಿದ್ದಾರೆ ಎಂದು ಹರಿಹಾಯ್ದಿದ್ದಾರೆ.

ಕೇಂದ್ರ ಗೃಹಸಚಿವ ಅಮಿತ್‌ ಶಾ ಅವರನ್ನು ಭೇಟಿಯಾದ ಸಿದ್ದರಾಮಯ್ಯ ಈ ವಿಚಾರವನ್ನು ಪ್ರಸ್ತಾಪಿಸಿದ್ದಾರೆ. ಬುಧವಾರ ರಾತ್ರಿ ನಡೆದ ಮಾತುಕತೆ ವೇಳೆ ಇದನ್ನು ಹೇಳಿದ್ದಾರೆ. ಆದರೆ ಅವರಿಂದಲೂ ಯಾವುದೇ ಖಚಿತ ಭರವಸೆ ಇಲ್ಲಿವರೆಗೆ ಸಿಕ್ಕಿಲ್ಲ. ನವದೆಹಲಿ ಪ್ರವಾಸದಲ್ಲಿ ಯಾವುದೇ ಗಣನೀಯ ಫಲ ಸಿಗದ ಹಿನ್ನೆಲೆಯಲ್ಲಿ ಸಿಎಂ ಸಿದ್ದರಾಮಯ್ಯ ಹಾಗೂ ಸಚಿವ ಕೆ.ಎಚ್‌. ಮುನಿಯಪ್ಪ ಕರ್ನಾಟಕಕ್ಕೆ ವಾಪಸಾಗಿದ್ದಾರೆ. ಹೊರಡುವ ಮುನ್ನ ನವದೆಹಲಿಯಲ್ಲಿ ಸಿದ್ದರಾಮಯ್ಯ ಪ್ರತಿಕ್ರಿಯೆ ನೀಡಿದ್ದಾರೆ.

ಬೆಂಗಳೂರಿಗೆ ಹೊರಡುವ ಮುನ್ನ ನವದೆಹಲಿಯ ಕರ್ನಾಟಕ ಭವನದಲ್ಲಿ ಮಾತನಾಡಿದ ಸಿದ್ದರಾಮಯ್ಯ, ಅಕ್ಕಿ ವಿತರಣೆ ಬಗ್ಗೆ ರಾಜಕೀಯ ಅಥವಾ ದ್ವೇಷದ ರಾಜಕಾರಣ ಮಾಡುವುದು ಬೇಡ ಎಂದು ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರಿಗೆ ತಿಳಿಸಿದ್ದೇನೆ. ಬುಧವಾರ ರಾತ್ರಿ ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರನ್ನು ಭೇಟಿ ಮಾಡಿದ ಸಂದರ್ಭದಲ್ಲಿ ಎಫ್.ಸಿ.ಐ ಅಕ್ಕಿ ನೀಡುವ ವಿಚಾರದಲ್ಲಿ ಒಪ್ಪಿಗೆ ಪತ್ರವನ್ನು ನೀಡಿ ಮರುದಿನವೇ ಅಕ್ಕಿ ವಿತರಣೆಯನ್ನು ರಾಜ್ಯಗಳಿಗೆ ಸ್ಥಗಿತಗೊಳಿಸಿಗಿರುವ ವಿಚಾರವನ್ನು ಗಮನಕ್ಕೆ ತರಲಾಗಿದೆ. ಸಂಬಂಧಪಟ್ಟ ಮಂತ್ರಿಗಳಿಗೆ ಮಾತನಾಡುತ್ತೇನೆ ಎಂದು ಅಮಿತ್ ಶಾ ಅವರು ಭರವಸೆ ನೀಡಿದ್ದಾರೆ ಎಂದರು. ಆದರೆ ಅಕ್ಕಿ ನೀಡುವ ಕುರಿತು ಯಾವುದೇ ಭರವಸೆಯ ಮಾತುಗಳು ಕೇಳಿಬರಲಿಲ್ಲ.

ಬೆಂಗಳೂರಿಗೆ ಆಗಮಿಸಿದ ನಂತರ ಮಾತನಾಡಿದ ಕೆ.ಎಚ್‌. ಮುನಿಯಪ್ಪ ಅಸಹಾಯಕತೆ ತೋಡಿಕೊಂಡಿದ್ದಾರೆ. ಆದಷ್ಟು ಬೇಗ ಅನ್ನ ಭಾಗ್ಯ ಜಾರಿ ಮಾಡ್ತೇವೆ. ದೇವರು ಆದಷ್ಟು ಬೇಗ ದಾರಿ ತೋರಿಸಲಿ ಅಂತ ಬೇಡಿಕೊಂಡಿದ್ದೇನೆ. ನಿನ್ನೆ ಪೀಯೂಷ್‌ ಗೋಯಲ್ ಟೈಂ ಕೊಡ್ತೀವಿ ಅಂತ ಟೈಂ ಕೊಡಲಿಲ್ಲ. ಬಡವರ ಅಕ್ಕಿ ವಿಚಾರದಲ್ಲಿ ಆಟ ಆಡ್ತಿದ್ದಾರೆ ರಾಜಕೀಯ ಮಾಡ್ತಿದ್ದಾರೆ. ಪಿಯುಷ್ ಗೋಯಲ್ ಅವರ ಕಚೇರಿಗೆ ನಮ್ಮ ಆಫೀಸಿಂದ ಸಂಪರ್ಕ ಮಾಡಿದ್ರು. ರಾಜ್ಯದ ಸಚಿವರೂ ಕೂಡ ಇವತ್ತು ಸಮಯ ಕೊಡ್ತೀವಿ ಅಂತ ಹೇಳಿ ಕೊನೆಗೆ ಸಮಯ ಕೊಡದೇ ನಿರಾಕರಿಸಿದರು. ಕೇಂದ್ರ ಆಹಾರ ಸಚಿವರು ಊರಲಿಲ್ಲ ಊರಲ್ಲಿಲ್ಲ ಅಂತ ಮಾತ್ರ ಹೇಳಿ ಭೇಟಿಗೆ ನಿರಾಕರಿಸಿದ್ದಾರೆ.

ಇವೆಲ್ಲವನ್ನೂ ನೋಡಿದರೆ ಅವರ ಮನಸ್ಥಿತಿ ಬಡವರಿಗೆ ಸಹಾಯ ಮಾಡುವಂತಿಲ್ಲ. ಕೇಂದ್ರ ಸರ್ಕಾರ ಕೊಡಲ್ಲ ಅಂತ ಹೇಳಿದ್ದಕ್ಕೆ ನಮ್ಮದೇ ಆದ ವ್ಯವಸ್ಥೆ ಮಾಡಿಕೊಂಡಿದ್ದೇವೆ. ಜುಲೈ 1 ರಂದು ಅಕ್ಕಿ ಕೊಡುವುದಕ್ಕೆ ಆಗದಿರಬಹುದು. ಆದರೆ ಆಗಸ್ಟ್ 1 ರ ಮೊದಲು ಅಕ್ಕಿ ಕೊಟ್ಟೇ ಕೊಡ್ತೇವೆ. ಛತ್ತೀಸ್‌ಗಢ 1.5 ಲಕ್ಷ ಮೆಟ್ರಿಕ್ ಟನ್ ಕೊಡಲು ಆಗಬಹುದು. ಪಂಜಾಬ್‌ನವರು ಕೊಡ್ತೀವಿ ಅಂದಿದ್ದಾರೆ. ಆದರೆ ಟ್ರಾನ್ಸಪೋರ್ಟೇಷನ್ ಚಾರ್ಜ್ ಜಾಸ್ತಿ ಆಗತ್ತೆ ಅಂತ ನಾವು ಬೇರೆ ವ್ಯವಸ್ಥೆ ಮಾಡ್ತಿದ್ದೇವೆ ಎಂದಿದ್ದಾರೆ.

ರಾಜ್ಯ ಹಾಗೂ ಕೇಂದ್ರ ಸರ್ಕಾರದ ನಡುವಿನ ಹಗ್ಗಜಗ್ಗಾಟದಲ್ಲಿ ಅನ್ನಭಾಗ್ಯ ಯೋಜನೆ ವಿಳಂಬವಾಗುತ್ತಿದ್ದು, ಇದು ಮುಂದಿನ ಲೋಕಸಭೆ ಚುನಾವಣೆ ಫಲಿತಾಂಶದ ಮೇಲೆಯೂ ಪರಿಣಾಮ ಬೀರಬಹುದು ಎಂಬ ಮಾತುಗಳು ರಾಜಕೀಯ ವಲಯದಲ್ಲಿ ಕೇಳಿಬರುತ್ತಿವೆ.

2-3 ತಿಂಗಳು ತಡ
ಜುಲೈ 1ರಿಂದ ಅನ್ನಭಾಗ್ಯ ಯೋಜನೆಯನ್ನು ಜಾರಿ ಮಾಡುವುದಾಗಿ ಸಿದ್ದರಾಮಯ್ಯ ಘೋಷಣೆ ಮಾಡಿದ್ದರು. ಆದರೆ ಇದೀಗ ಉಂಟಾಗಿರುವ ಗೊಂದಲದಿಂದ ಅದು ಸಾಧ್ಯವಿಲ್ಲ ಎನ್ನಲಾಗುತ್ತಿದೆ. ಇನ್ನೂ ನಾಫೆಡ್, ಎನ್‌ಸಿಸಿಎಫ್, ಭಂಡಾರದಿಂದ ಕೊಟೇಷನ್ ಬರಬೇಕು. ಕೊಟೇಷನ್‌ಗೆ ಸರ್ಕಾರದ ಒಪ್ಪಿಗೆ ನೀಡಬೇಕು. ಇದಾದ ಮೇಲೆ ಟೆಂಡರ್ ಪ್ರಕ್ರಿಯೆ ಆಗಬೇಕು. ಎಲ್ಲಾ ಪ್ರತಿಕ್ರಿಯೆ ಮುಗಿದು ಹೆಚ್ಚುವರಿ ಅಕ್ಕಿ ಫಲಾನುಭವಿಗಳ ಕೈ ಸೇರಬೇಕು. ಆದ್ದರಿಂದ ಹೆಚ್ಚುವರಿ ಅಕ್ಕಿ ಸಿಗುವುದು 2-3 ತಿಂಗಳು ತಡ ಆಗುತ್ತದೆ ಎನ್ನಲಾಗಿದೆ.

ಇದನ್ನೂ ಓದಿ: CM Siddaramaiah: ರಾಜ್ಯಕ್ಕೆ ಅಕ್ಕಿಗಾಗಿ ಮುಂದುವರಿದ ಜಟಾಪಟಿ, ಸಿಗದ ಕೇಂದ್ರ ಆಹಾರ ಸಚಿವ, ಅನ್ನಭಾಗ್ಯ ಫಲಾನುಭವಿಗಳು ಅತಂತ್ರ

ಕ್ಷಣ ಕ್ಷಣದ ಮಾಹಿತಿಗಾಗಿ Vistara News FaceBook ಪೇಜ್ ಫಾಲೋ ಮಾಡಿ
ಮಹತ್ವದ ಮಾಹಿತಿಗಾಗಿ ವಿಸ್ತಾರ ನ್ಯೂಸ್ ಆ್ಯಪ್ ಉಚಿತವಾಗಿ ಡೌನ್ ಲೋಡ್ ಮಾಡಿಕೊಳ್ಳಿ: Andriod App | IOS App
Continue Reading
Click to comment

Leave a Reply

Your email address will not be published. Required fields are marked *

ಕರ್ನಾಟಕ

Election Results 2024: ಹಾಸನದಲ್ಲಿ ಜೆಡಿಎಸ್‌ ಮುನ್ನಡೆ; ಪ್ರಜ್ವಲ್ ರೇವಣ್ಣಗೆ ಇಲ್ಲ ಫಲಿತಾಂಶ ನೋಡುವ ಭಾಗ್ಯ!

Election Results 2024: ಚುನಾವಣೆ ಫಲಿತಾಂಶ ವೀಕ್ಷಿಸಲು ಟಿವಿ ವ್ಯವಸ್ಥೆ ಮಾಡಿ ಎಂದು ಎಸ್ಐಟಿ ಮುಂದೆ ಪ್ರಜ್ಬಲ್ ಬೇಡಿಕೆ ಇಟ್ಟಿದ್ದಾರೆ. ಆದರೆ, ಅಧಿಕಾರಿಗಳು ನಿರಾಕರಿಸಿದ್ದಾರೆ ಎನ್ನಲಾಗಿದೆ.

VISTARANEWS.COM


on

Election Results 2024
Koo

ಬೆಂಗಳೂರು: ಲೈಂಗಿಕ ದೌರ್ಜನ್ಯ ಪ್ರಕರಣದಲ್ಲಿ ಎಸ್‌ಐಟಿ ಕಸ್ಟಡಿಯಲ್ಲಿರುವ ಪ್ರಜ್ವಲ್‌ ರೇವಣ್ಣ ತಮ್ಮ ಕ್ಷೇತ್ರದ ಚುನಾವಣಾ ಫಲಿತಾಂಶ (Election Results 2024) ನೋಡಲಾಗದ ಸ್ಥಿತಿಯಲ್ಲಿ ಇದ್ದಾರೆ. ಒಂದೆಡೆ ಹಾಸನದಲ್ಲಿ ಜೆಡಿಎಸ್‌ ಮುನ್ನಡೆಯಲ್ಲಿದ್ದರೆ, ಮತ್ತೊಂದೆಡೆ ಮೈತ್ರಿ ಅಭ್ಯರ್ಥಿ ಪ್ರಜ್ವಲ್ ಫಲಿತಾಂಶ ನೋಡಲಾಗದೆ, ಕೇಳಲಾಗದೆ ಪರಿತಪಿಸುತ್ತಿದ್ದಾರೆ.

ಹಾಸನದ ಮತ ಎಣಿಕೆ ತೀವ್ರ ಕುತೂಹಲ ಮೂಡಿಸಿದ್ದು, ಪ್ರಜ್ವಲ್‌ ರೇವಣ್ಣ ಒಮ್ಮೆ ಹಿನ್ನಡೆ, ಮತ್ತೊಮ್ಮೆ ಮುನ್ನಡೆ ಸಾಧಿಸುತ್ತಿದ್ದಾರೆ. ಸದ್ಯ ಪ್ರಜ್ವಲ್‌ 3009 ಮತಗಳ ಮುನ್ನಡೆಯಲ್ಲಿದ್ದಾರೆ. ಫಲಿತಾಂಶ ವೀಕ್ಷಿಸಲು ಟಿವಿ ವ್ಯವಸ್ಥೆ ಮಾಡಿ ಎಂದು ಎಸ್ಐಟಿ ಮುಂದೆ ಪ್ರಜ್ಬಲ್ ಬೇಡಿಕೆ ಇಟ್ಟಿದ್ದಾರೆ. ಆದರೆ, ಟಿವಿ ವ್ಯವಸ್ಥೆಗೆ ಕೋರ್ಟ್ ಅನುಮತಿ ಬೇಕೆಂದು ಎಸ್ಐಟಿ ತನಿಖಾಧಿಕಾರಿ ಹೇಳಿದ್ದಾರೆ. ಹೀಗಾಗಿ ಎಸ್ಐಟಿ ಸೆಲ್‌ನಲ್ಲಿ ಪ್ರಜ್ವಲ್ ಡಲ್ಲಾಗಿ ಅತ್ತಿಂದಿತ್ತ ಓಡಾಡಿಕೊಂಡಿದ್ದಾರೆ.

ಇದನ್ನೂ ಓದಿ | Election Results 2024 : ಲೋಕಸಭಾ ಚುನಾವಣಾ ಮತ ಎಣಿಕೆ ಆರಂಭ; ಇವಿಎಂಗಳಲ್ಲಿದ್ದ ಪಕ್ಷಗಳ ಭವಿಷ್ಯ ಬಹಿರಂಗ

ಬೆಂ.ಗ್ರಾಮಾಂತರದಲ್ಲಿ ಡಾ.ಸಿ.ಎನ್.ಮಂಜುನಾಥ್‌ ಭರ್ಜರಿ ಮುನ್ನಡೆ

ಹೈ ವೋಲ್ಟೇಜ್‌ ಸ್ಪರ್ಧೆಯ ಕ್ಷೇತ್ರವಾಗಿರುವ ಬೆಂಗಳೂರು ಗ್ರಾಮಾಂತರದಲ್ಲಿ (Bangalore Rural Lok Sabha Constituency) ಮತ ಎಣಿಕೆ (vote counting) ಕಾರ್ಯ ಸಾಂಗವಾಗಿ ನಡೆಯುತ್ತಿದ್ದು, ಬಿಜೆಪಿ ಅಭ್ಯರ್ಥಿ ಡಾ. ಸಿ.ಎನ್‌ ಮಂಜುನಾಥ್‌ (Dr CN Manjunath) ಭರ್ಜರಿ ಮುನ್ನಡೆ ಸಾಧಿಸಿದ್ದಾರೆ. 9 ಗಂಟೆಯ ಹೊತ್ತಿಗೆ ತಮ್ಮ ಪ್ರತಿಸ್ಪರ್ಧಿ ಕಾಂಗ್ರೆಸ್‌ನ ಡಿ.ಕೆ ಸುರೇಶ್‌ (DK Suresh) ಅವರಿಗಿಂತ 50,000 ಮತಗಳ ಮುನ್ನಡೆ (Election results 2024) ಕಾಯ್ದುಕೊಂಡಿದ್ದಾರೆ.

ಇದನ್ನೂ ಓದಿ | Election Result 2024: ವಾರಾಣಸಿಯಲ್ಲಿ ಮೋದಿಗೆ ಆಘಾತ; 6,223 ಮತಗಳ ಹಿನ್ನಡೆ

ಮಂಡ್ಯದಲ್ಲಿ ಎಚ್‌ಡಿಕೆ 33,168 ಮತಗಳ ಲೀಡ್‌

ಮಂಡ್ಯದಲ್ಲಿ ಜೆಡಿಎಸ್​​ (ಮೈತ್ರಿ ಅಭ್ಯರ್ಥಿ) ಎಚ್.ಡಿ.ಕುಮಾರಸ್ವಾಮಿ 33,168 ಮತಗಳ ಅಂತರದಿಂದ ಮುನ್ನಡೆಯಲ್ಲಿದ್ದಾರೆ. ಮೈಸೂರು-ಕೊಡಗು ಕ್ಷೇತ್ರದಲ್ಲಿ ಬಿಜೆಪಿ ಅಭ್ಯರ್ಥಿ ಯದುವೀರ್ 26018 ಮತಗಳ ಮುನ್ನಡೆಯಲ್ಲಿದ್ದಾರೆ. ಚಿಕ್ಕಬಳ್ಳಾಪುರದಲ್ಲಿ ಬಿಜೆಪಿ ಅಭ್ಯರ್ಥಿ ಡಾ ಕೆ ಸುಧಾಕರ್ 7790 ಮತಗಳ ಮುನ್ನಡೆ ಕಾಯ್ದುಕೊಂಡಿದ್ದಾರೆ. ಚಿಕ್ಕೋಡಿ ಕ್ಷೇತ್ರದಲ್ಲಿ ಕಾಂಗ್ರೆಸ್ ಅಭ್ಯರ್ಥಿ ಪ್ರಿಯಾಂಕಾ ಜಾರಕಿಹೊಳಿ 32936 ಮತಗಳ ಭಾರಿ ಮುನ್ನಡೆ ಸಾಧಿಸಿದ್ದಾರೆ.

Continue Reading

Lok Sabha Election 2024

Election results 2024: ಬೆಂಗಳೂರು ಗ್ರಾಮಾಂತರದಲ್ಲಿ ಬಿಜೆಪಿ ಅಭ್ಯರ್ಥಿ ಡಾ. ಮಂಜುನಾಥ್‌ ಭರ್ಜರಿ ಮುನ್ನಡೆ

Election results 2024: ಮತ ಎಣಿಕೆಯ ಆರಂಭದ ಕ್ಷಣಗಳಿಂದಲೇ ಡಾ. ಮಂಜುನಾಥ್‌ ತಮ್ಮ ಮುನ್ನಡೆಯ ವೇಗವನ್ನು ಕಾಯ್ದುಕೊಂಡರು. ‌ಡಿ.ಕೆ ಸುರೇಶ್‌ ಅವರು ಹಿಂದುಳಿದರು. ಭಾರಿ ಉತ್ಸಾಹದಿಂದ ಮತ ಎಣಿಕೆ ಕೇಂದ್ರಗಳಿಗೆ ಬಂದಿದ್ದ ಕಾಂಗ್ರೆಸ್‌ ಕಾರ್ಯಕರ್ತರಲ್ಲಿ ಆತಂಕ ಮನೆಮಾಡಿದರೆ, ಬಿಜೆಪಿ ಕಾರ್ಯಕರ್ತರು ಉತ್ಸಾಹ ಹೆಚ್ಚಿಸಿಕೊಂಡರು.

VISTARANEWS.COM


on

election results 2024 Lok Sabha Election 2024 Bengaluru Rural Lok Sabha constituency is the most sensitive Election Commission deploys paramilitary forces
Koo

ಬೆಂಗಳೂರು: ಹೈ ವೋಲ್ಟೇಜ್‌ ಸ್ಪರ್ಧೆಯ ಕ್ಷೇತ್ರವಾಗಿರುವ ಬೆಂಗಳೂರು ಗ್ರಾಮಾಂತರದಲ್ಲಿ (Bangalore Rural Lok Sabha Constituency) ಮತ ಎಣಿಕೆ (vote counting) ಕಾರ್ಯ ಸಾಂಗವಾಗಿ ನಡೆಯುತ್ತಿದ್ದು, ಬಿಜೆಪಿ ಅಭ್ಯರ್ಥಿ ಡಾ. ಸಿ.ಎನ್‌ ಮಂಜುನಾಥ್‌ (Dr CN Manjunath) ಭರ್ಜರಿ ಮುನ್ನಡೆ ಸಾಧಿಸಿದ್ದಾರೆ. 9 ಗಂಟೆಯ ಹೊತ್ತಿಗೆ ತಮ್ಮ ಪ್ರತಿಸ್ಪರ್ಧಿ ಕಾಂಗ್ರೆಸ್‌ನ ಡಿ.ಕೆ ಸುರೇಶ್‌ (DK Suresh) ಅವರಿಗಿಂತ 50,000 ಮತಗಳ ಮುನ್ನಡೆ (Election results 2024) ಕಾಯ್ದುಕೊಂಡಿದ್ದಾರೆ.

ಮತ ಎಣಿಕೆಯ ಆರಂಭದ ಕ್ಷಣಗಳಿಂದಲೇ ಡಾ. ಮಂಜುನಾಥ್‌ ತಮ್ಮ ಮುನ್ನಡೆಯ ವೇಗವನ್ನು ಕಾಯ್ದುಕೊಂಡರು. ‌ಡಿ.ಕೆ ಸುರೇಶ್‌ ಅವರು ಹಿಂದುಳಿದರು. ಭಾರಿ ಉತ್ಸಾಹದಿಂದ ಮತ ಎಣಿಕೆ ಕೇಂದ್ರಗಳಿಗೆ ಬಂದಿದ್ದ ಕಾಂಗ್ರೆಸ್‌ ಕಾರ್ಯಕರ್ತರಲ್ಲಿ ಆತಂಕ ಮನೆಮಾಡಿದರೆ, ಬಿಜೆಪಿ ಕಾರ್ಯಕರ್ತರು ಉತ್ಸಾಹ ಹೆಚ್ಚಿಸಿಕೊಂಡರು.

ಬೆಂಗಳೂರು ಗ್ರಾಮಾಂತರ ಲೋಕಸಭೆ ಕ್ಷೇತ್ರ 24 ಲಕ್ಷ ಮತದಾರರನ್ನು ಹೊಂದಿರುವ ದೇಶದ ಪ್ರಮುಖ ಲೋಕಸಭಾ ಕ್ಷೇತ್ರಗಳಲ್ಲಿ ಒಂದಾಗಿದೆ. ಈ ಸ್ಥಾನವು 2008ರಲ್ಲಿ ಕ್ಷೇತ್ರ ಮರುವಿಂಗಡಣೆ ನಂತರ ಅಸ್ತಿತ್ವಕ್ಕೆ ಬಂತು. ಇಲ್ಲಿ ಮೊದಲ ಚುನಾವಣೆ 2009ರಲ್ಲಿ ನಡೆಯಿತು. ಕರ್ನಾಟಕದ ಮಾಜಿ ಮುಖ್ಯಮಂತ್ರಿ ಮತ್ತು ಜೆಡಿಎಸ್ (JDS) ನಾಯಕ ಎಚ್.ಡಿ.ಕುಮಾರಸ್ವಾಮಿ (HD kumaraswmay) ಈ ಕ್ಷೇತ್ರದ ಮೊದಲ ಸಂಸದ. ಆದರೆ, 2013ರ ಉಪಚುನಾವಣೆ ಸೇರಿದಂತೆ ಸತತ ಎರಡು ಬಾರಿ ಕಾಂಗ್ರೆಸ್ ಈ ಸ್ಥಾನವನ್ನು ಗೆದ್ದುಕೊಂಡಿದೆ. ಇಲ್ಲಿನ ಹಾಲಿ ಸಂಸದ ಕರ್ನಾಟಕದ ಡಿಸಿಎಂ ಡಿ.ಕೆ ಶಿವಕುಮಾರ್ (D K Shivakumar) ಅವರ ಸಹೋದರ ಡಿ.ಕೆ ಸುರೇಶ್​.

ಕ್ಷೇತ್ರ ವಿಂಗಡಣೆಗೆ ಮೊದಲು ಇದನ್ನು ಕನಕಪುರ ಲೋಕಸಭಾ ಕ್ಷೇತ್ರವಾಗಿ ಗುರುತಿಸಲಾಗಿತ್ತು. ಮಾಜಿ ಪ್ರಧಾನಿ ಹಾಗೂ ಜೆಡಿಎಸ್ ವರಿಷ್ಠ ಎಚ್. ಡಿ.ದೇವೇಗೌಡ ಅವರು ಇಲ್ಲಿ ಕೊನೇ ಬಾರಿ ಗೆದ್ದಿದ್ದರು. ಎಂ.ವಿ.ಚಂದ್ರಶೇಖರ ಮೂರ್ತಿ ಈ ಕ್ಷೇತ್ರದಿಂದ ಐದು ಬಾರಿ ಸಂಸದರಾಗಿ ಆಯ್ಕೆಯಾಗಿದ್ದರು. ಈ ಕ್ಷೇತ್ರವು ಎಂಟು ವಿಧಾನಸಭಾ ಕ್ಷೇತ್ರಗಳನ್ನು ಒಳಗೊಂಡಿದೆ. ಅವುಗಳಲ್ಲಿ ಏಳು ಹಿಂದಿನ ಕನಕಪುರ ಲೋಕಸಭಾ ಕ್ಷೇತ್ರದ ಭಾಗವಾಗಿದ್ದವು. ತುಮಕೂರು ಜಿಲ್ಲೆಯ ಕುಣಿಗಲ್ ಜೊತೆಗೆ ಬೆಂಗಳೂರು ದಕ್ಷಿಣ, ಆನೇಕಲ್ ಮತ್ತು ರಾಜರಾಜೇಶ್ವರಿ ನಗರ ಹೊಸ ವಿಧಾನಸಭಾ ಕ್ಷೇತ್ರಗಳು ಇದರ ಭಾಗವಾಗಿವೆ.

ಈ ಬಾರಿ ಕ್ಷೇತ್ರವನ್ನು ಉಳಿಸಿಕೊಳ್ಳಲು ಕಾಂಗ್ರೆಸ್ ಡಿ.ಕೆ.ಸುರೇಶ್ ಅವರನ್ನು ಕಣಕ್ಕಿಳಿಸಿದೆ. ಬಿಜೆಪಿ-ಜೆಡಿಎಸ್ ಮೈತ್ರಿಕೂಟವು ಕಾಂಗ್ರೆಸ್ ಅಭ್ಯರ್ಥಿಯನ್ನು ಎದುರಿಸಲು ಎಚ್.ಡಿ.ಕುಮಾರಸ್ವಾಮಿ ಅವರ ಭಾವ ಡಾ.ಸಿ.ಎನ್.ಮಂಜುನಾಥ್ ಅವರನ್ನು ನಿಲ್ಲಿಸಿದೆ. 2014ರ ಚುನಾವಣೆಯಲ್ಲಿ ಮೋದಿ ಅಲೆಯ ನಡುವೆಯೂ ಬೆಂಗಳೂರು ಗ್ರಾಮಾಂತರ ಕ್ಷೇತ್ರವನ್ನು ಉಳಿಸಿಕೊಳ್ಳುವಲ್ಲಿ ಕಾಂಗ್ರೆಸ್ ಯಶಸ್ವಿಯಾಗಿತ್ತು. ಕಾಂಗ್ರೆಸ್ ಅಭ್ಯರ್ಥಿ ಡಿ.ಕೆ.ಸುರೇಶ್ ಅವರು ಬಿಜೆಪಿಯ ಮುನಿರಾಜು ಗೌಡ ಅವರನ್ನು 2.31 ಲಕ್ಷ ಮತಗಳ ಅಂತರದಿಂದ ಸೋಲಿಸಿದ್ದರು. ಸುರೇಶ್ 6.52 ಲಕ್ಷ ಮತಗಳನ್ನು ಪಡೆದರೆ, ಗೌಡರು 4.21 ಲಕ್ಷ ಮತಗಳನ್ನು ಮಾತ್ರ ಪಡೆದರು.

2019ರ ಸಾರ್ವತ್ರಿಕ ಚುನಾವಣೆಯಲ್ಲಿ ಡಿ.ಕೆ.ಸುರೇಶ್ ಅವರು ಬಿಜೆಪಿಯ ಅಶ್ವತ್ಥನಾರಾಯಣ ಗೌಡ ಅವರನ್ನು 2,06,870 ಮತಗಳ ಭಾರೀ ಅಂತರದಿಂದ ಸೋಲಿಸಿದ್ದರು. ಈ ಕ್ಷೇತ್ರದಲ್ಲಿ 2019 ರಲ್ಲಿ ಕಾಂಗ್ರೆಸ್ 54.12% ಮತಗಳನ್ನು ಹೊಂದಿತ್ತು. 2014ರ ಸಾರ್ವತ್ರಿಕ ಚುನಾವಣೆಯಲ್ಲಿ ಡಿ.ಕೆ.ಸುರೇಶ್ ಅವರು ಬಿಜೆಪಿಯ ಮುನಿರಾಜು ಗೌಡ ಪಿ ಅವರನ್ನು 2,31,480 ಮತಗಳ ಭಾರೀ ಅಂತರದಿಂದ ಸೋಲಿಸಿದ್ದರು. ಕಾಂಗ್ರೆಸ್ 44.76% ಮತಗಳನ್ನು ಗಳಿಸಿದೆ.

2009ರ ಸಾರ್ವತ್ರಿಕ ಚುನಾವಣೆಯಲ್ಲಿ ಎಚ್.ಡಿ.ಕುಮಾರಸ್ವಾಮಿ ಅವರು ಬಿಜೆಪಿಯ ಸಿ.ಪಿ.ಯೋಗೀಶ್ವರ್ ಅವರನ್ನು 1,30,275 ಮತಗಳ ಭಾರೀ ಅಂತರದಿಂದ ಸೋಲಿಸಿದ್ದರು. ಈ ಕ್ಷೇತ್ರದಲ್ಲಿ ಜೆಡಿಎಸ್ ಶೇ.44.73ರಷ್ಟು ಮತಗಳನ್ನು ಪಡೆದಿತ್ತು.

ಬೆಂಗಳೂರು ಗ್ರಾಮಾಂತರ ಲೋಕಸಭಾ ಕ್ಷೇತ್ರದ ವ್ಯಾಪ್ತಿಯಲ್ಲಿ ಕುಣಿಗಲ್, ರಾಜರಾಜೇಶ್ವರಿನಗರ, ಬೆಂಗಳೂರು ದಕ್ಷಿಣ, ಆನೇಕಲ್, ಮಾಗಡಿ, ರಾಮನಗರ, ಕನಕಪುರ ಮತ್ತು ಚನ್ನಪಟ್ಟಣ ವಿಧಾನಸಭಾ ಕ್ಷೇತ್ರಗಳಿವೆ. ಕಾಂಗ್ರೆಸ್ 5, ಬಿಜೆಪಿ 2, ಜೆಡಿಎಸ್ 1 ಸ್ಥಾನ ಹೊಂದಿವೆ. ಭಾರತದ ಚುನಾವಣಾ ಆಯೋಗದ ಪ್ರಕಾರ, 2019 ರಲ್ಲಿ ಒಟ್ಟು ಮತದಾರರ ಸಂಖ್ಯೆ 24,97,458. 2019ರಲ್ಲಿ ಶೇ.64.9ರಷ್ಟು ಮತದಾನವಾಗಿತ್ತು. 2011 ರ ಜನಗಣತಿಯ ಅಂಕಿಅಂಶಗಳ ಪ್ರಕಾರ ನಗರ ಮತದಾರರು ಒಟ್ಟು ಮತದಾರ ಪೈಕಿ 54.2% ರಷ್ಟಿದ್ದಾರೆ. ಸರಾಸರಿ ಸಾಕ್ಷರತಾ ಪ್ರಮಾಣವು 68.91% ಆಗಿತ್ತು.

ಇದನ್ನೂ ಓದಿ: Election Results 2024: ಪಶ್ಚಿಮ ಬಂಗಾಲದಲ್ಲಿ ಮತ ಎಣಿಕೆಗೂ ಮುನ್ನ ಬಾಂಬ್‌ ಸ್ಫೋಟ, ಐವರಿಗೆ ಗಾಯ

Continue Reading

ಪ್ರಮುಖ ಸುದ್ದಿ

Election Results 2024: ರಾಜ್ಯದ 474 ಅಭ್ಯರ್ಥಿಗಳ ರಾಜಕೀಯ ಭವಿಷ್ಯ ನಿರ್ಧಾರಕ್ಕೆ ಕೌಂಡ್ ಡೌನ್

Election Results 2024: ರಾಜ್ಯದ 28 ಕ್ಷೇತ್ರಗಳ ಮತ ಎಣಿಕಾ ಕೇಂದ್ರಗಳಲ್ಲಿ ಮೂರು ಹಂತದ ಬಿಗಿ ಬಂದೋಬಸ್ತ್ ಏರ್ಪಡಿಸಲಾಗಿದ್ದು, ಬೆಳಗ್ಗೆ 8ಗಂಟೆಗೆ ಮತ ಎಣಿಕೆ ಆರಂಭವಾಗಿದೆ.

VISTARANEWS.COM


on

Lok Sabha Election Results 2024
Koo

ಬೆಂಗಳೂರು: ರಾಜ್ಯದಲ್ಲಿ ನಡೆದ ಲೋಕಸಭಾ ಚುನಾವಣೆಯಲ್ಲಿ (Election Results 2024) ಸ್ಪರ್ಧಿಸಿದ್ದ ಒಟ್ಟು 474 ಅಭ್ಯರ್ಥಿಗಳ ರಾಜಕೀಯ ಭವಿಷ್ಯ ನಿರ್ಧಾರಕ್ಕೆ ಕೌಂಡ್ ಡೌನ್ ಶುರುವಾಗಿದೆ. ಮತ ಎಣಿಕೆ ಹಿನ್ನೆಲೆಯಲ್ಲಿ ರಾಜ್ಯದ 28 ಕ್ಷೇತ್ರಗಳ ಮತ ಎಣಿಕಾ ಕೇಂದ್ರಗಳಲ್ಲಿ ಮೂರು ಹಂತದ ಬಿಗಿ ಬಂದೋಬಸ್ತ್ ಏರ್ಪಡಿಸಲಾಗಿದ್ದು, ಬೆಳಗ್ಗೆ 8ಗಂಟೆಗೆ ಮತ ಎಣಿಕೆ ಆರಂಭವಾಗಿದೆ. ಮಧ್ಯಾಹ್ನ 12 ರೊಳಗೆ ಬಹುತೇಕ ಯಾರು ಗೆಲ್ಲಲಿದ್ದಾರೆ ಎಂಬ ಚಿತ್ರಣ ಸಿಗಲಿದ್ದು, ಸಂಜೆ ಅಂತಿಮ ಫಲಿತಾಂಶ ಹೊರಬೀಳಲಿದೆ.

ಬೆಳಗ್ಗೆ 7:45 ರ ಸುಮಾರಿಗೆ ಚುನಾವಣಾಧಿಕಾರಿಗಳ ಸಮ್ಮುಖದಲ್ಲಿ ಸ್ಟ್ರಾಂಗ್ ರೂಂ ಓಪನ್ ಮಾಡಲಾಗಿದ್ದು, ನಂತರ ಮತ ಎಣಿಕೆ ಕೊಠಡಿಗೆ ಇವಿಎಂಗಳನ್ನು ಅಧಿಕಾರಿಗಳು ಕೊಂಡೊಯ್ದರು. ಒಂದು ಕೊಠಡಿಯಲ್ಲಿ 14 ಟೇಬಲ್‌ಗಳ ವ್ಯವಸ್ಥೆ ಮಾಡಲಾಗಿದ್ದು, ಕೊಠಡಿ ದೊಡ್ಡದಿದ್ದರೆ ಹೆಚ್ಚುವರಿ ಟೇಬಲ್ ಹಾಕಲು ಅವಕಾಶ ಮಾಡಿಕೊಡಲಾಗಿದೆ. 20-25 ಸುತ್ತಿನವರೆಗೆ ಮತ ಎಣಿಕೆ ಪ್ರಕ್ರಿಯೆ ನಡೆಯಲಿದೆ.

ಇದನ್ನೂ ಓದಿ | Lok Sabha Election Result 2024 Live: ಲೋಕಸಭೆ ಚುನಾವಣೆ ಫಲಿತಾಂಶದ ಲೈವ್‌ ಇಲ್ಲಿ ವೀಕ್ಷಿಸಿ

ರಾಜ್ಯದಲ್ಲಿ ಏಪ್ರಿಲ್ 26 ರಂದು ನಡೆದ ಮೊದಲ ಹಂತದಲ್ಲಿ 247 ಅಭ್ಯರ್ಥಿಗಳು ಹಾಗೂ ಮೇ 7 ರಂದು ನಡೆದ ಎರಡನೇ ಹಂತದಲ್ಲಿ 227 ಅಭ್ಯರ್ಥಿಗಳು ಅಖಾಡದಲ್ಲಿದ್ದಾರೆ. ಒಟ್ಟು 474 ಅಭ್ಯರ್ಥಿಗಳ ರಾಜಕೀಯ ಭವಿಷ್ಯ ಇಂದು ಬಹಿರಂಗವಾಗಲಿದೆ.

Continue Reading

ಮಳೆ

Karnataka Weather : ಹವಾಮಾನ ತಜ್ಞರ ವಾರ್ನಿಂಗ್‌; ಇನ್ನೊಂದು ವಾರ ವಿಪರೀತ ಮಳೆ, ಜೂ.6ರ ವರೆಗೂ ಮೀನುಗಾರಿಕೆಗೆ ಬ್ರೇಕ್‌

Heavy Rain Warning: ರಾಜ್ಯಾದ್ಯಂತ (Karnataka Weather forecast) ಗುಡುಗು ಸಹಿತ ಭಾರಿ ಮಳೆಯಾಗಲಿದ್ದು, ಯೆಲ್ಲೋ ಅಲರ್ಟ್‌ ಘೋಷಣೆ (Yellow Alert) ಮಾಡಲಾಗಿದೆ. ಜತೆಗೆ ಸಮುದ್ರಕ್ಕಿಳಿಯದಂತೆ ಮೀನುಗಾರರಿಗೆ ಎಚ್ಚರಿಕೆ (Fisher Waring) ನೀಡಲಾಗಿದೆ

VISTARANEWS.COM


on

By

karnataka weather Forecast
ಸಾಂದರ್ಭಿಕ ಚಿತ್ರ
Koo

ಬೆಂಗಳೂರು: ನೈರುತ್ಯ ಮುಂಗಾರು (Monsoon rains) ಬೆಂಗಳೂರು ಸೇರಿದಂತೆ ದಕ್ಷಿಣ ಒಳನಾಡು, ಕರಾವಳಿ, ಮಲೆನಾಡಿನ ಕೆಲವು ಭಾಗಗಳಲ್ಲಿ ಮುಂದುವರೆದಿದೆ. ಜೂ.4ರಂದು ದಕ್ಷಿಣ ಒಳನಾಡು, ಉತ್ತರ ಒಳನಾಡಿನಲ್ಲಿ ಪ್ರತ್ಯೇಕವಾಗಿ ಭಾರಿ ಮಳೆಯಾಗುವ (Heavy Rain) ಸಾಧ್ಯತೆಯಿದೆ. ಮಲೆನಾಡು ಮತ್ತು ಕರಾವಳಿ ಭಾಗಗಳಲ್ಲಿ ಸಾಧಾರಣ (Rain News) ಮಳೆಯಾಗಲಿದೆ. ರಾಜ್ಯದ ಪ್ರತ್ಯೇಕ ಸ್ಥಳಗಳಲ್ಲಿ ಗುಡುಗು, ಮಿಂಚು ಸಹಿತ ಮತ್ತು ಗಂಟೆಗೆ 30-40 ಕಿ.ಮೀ ವೇಗದಲ್ಲಿ ಗಾಳಿ ಬೀಸುವ ಸಾಧ್ಯತೆಯಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆಯನ್ನು (Karnataka Weather Forecast) ನೀಡಿದೆ.

ದಕ್ಷಿಣ ಒಳನಾಡಿನ ಮಂಡ್ಯ ಮತ್ತು ಮೈಸೂರಿನಲ್ಲಿ ಪ್ರತ್ಯೇಕ ಕಡೆಗಳಲ್ಲಿ ಭಾರಿ ಮಳೆಯಾಗುವ ಸಾಧ್ಯತೆ ಇದೆ. ಉಳಿದ ಭಾಗಗಳಲ್ಲಿ ಚದುರಿದಂತೆ ಹಗುರದಿಂದ ಮಧ್ಯಮ ಮಳೆಯಾಗಲಿದೆ. ಉತ್ತರ ಒಳನಾಡಿನ ಬೆಳಗಾವಿ, ವಿಜಯಪುರ, ಧಾರವಾಡ, ಗದಗದಲ್ಲಿ ಭಾರೀ ಮಳೆಯಾಗುವ ಸೂಚನೆ ಇದೆ. ಜತೆಗೆ ಬೀದರ್, ಕಲಬುರಗಿ, ಬಾಗಲಕೋಟೆ ಜಿಲ್ಲೆಗಳಲ್ಲಿ ಸಾಧಾರಣ ಮಳೆಯಾಗಲಿದೆ. ಉಳಿದೆಡೆ ಹಗುರದಿಂದ ಕೂಡಿದ ಮಳೆಯಾಗಲಿದೆ.

ಮಲೆನಾಡಿನ ಹಾಸನ, ಕೊಡಗು, ಚಿಕ್ಕಮಗಳೂರು, ಶಿವಮೊಗ್ಗದಲ್ಲಿ ಚದುರಿದಂತೆ ಸಾಧಾರಣ ಮಳೆಯಾಗಬಹುದು. ಕರಾವಳಿಯ ದಕ್ಷಿಣ ಕನ್ನಡ, ಉಡುಪಿ ಮತ್ತು ಉತ್ತರ ಕನ್ನಡದಲ್ಲಿ ಹಗುರದೊಂದಿಗೆ ಶುರುವಾಗಿ ಸಾಧಾರಣ ಮಳೆಯಾಗಲಿದೆ.

ಇದನ್ನೂ ಓದಿ: Karnataka Rain : 133 ವರ್ಷದ ರೆಕಾರ್ಡ್ ಬ್ರೇಕ್ ಮಾಡಿದ ʻಬೆಂಗಳೂರು ಮಳೆʼ

ಜೂ.6ರ ವರೆಗೆ ಮೀನುಗಾರಿಕೆಗೆ ತೆರಳದಂತೆ ಸೂಚನೆ

ಕರ್ನಾಟಕ ಕರಾವಳಿಯಲ್ಲಿ 35- 45 ಕಿ.ಮೀ ಗಾಳಿ ಬೀಸಲಿದೆ. ಸಮುದ್ರ ಮಟ್ಟದಲ್ಲಿ ಗಂಟೆಗೆ 55 ಕಿ.ಮೀ ವೇಗದಲ್ಲಿ ಗಾಳಿ ಬೀಸುವ ಸಾಧ್ಯತೆಯಿದೆ ಇದೆ. ಹೀಗಾಗಿ ಜೂನ್ 4 ರಿಂದ ಜೂನ್ 6ವರೆಗೆ ಮೀನುಗಾರರು ಸಮುದ್ರಕ್ಕೆ ಇಳಿಯದಂತೆ ಸೂಚನೆ ನೀಡಲಾಗಿದೆ.

ಯೆಲ್ಲೋ‌ ಅಲರ್ಟ್‌ ಘೋಷಣೆ

ಗುಡುಗು ಸಹಿತ ಭಾರೀ ಮಳೆಯೊಂದಿಗೆ ಗಂಟೆಗೆ 40-50 ಕಿ.ಮೀ ವೇಗದಲ್ಲಿ ಗಾಳಿ ಬೀಸಲಿದೆ. ಹೀಗಾಗಿ ದಕ್ಷಿಣ ಕನ್ನಡ, ಉಡುಪಿ, ಬೆಳಗಾವಿ, ಧಾರವಾಡ, ಗದಗ, ಹಾವೇರಿ, ಕೊಪ್ಪಳ, ವಿಜಯಪುರ, ಬಳ್ಳಾರಿ, ಬೆಂಗಳೂರು ಗ್ರಾಮಾಂತರ, ಬೆಂಗಳೂರು ನಗರ, ಚಿಕ್ಕಮಗಳೂರು, ಹಾಸನ, ಮಂಡ್ಯ, ರಾಮನಗರ, ಶಿವಮೊಗ್ಗ ಮತ್ತು ತುಮಕೂರು ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್‌ ಘೋಷಣೆ ಮಾಡಲಾಗಿದೆ.

ಈ ಸಂಗತಿಯ ಕುರಿತು ನಿಮ್ಮ ಅನಿಸಿಕೆ ಏನು? ಕಾಮೆಂಟ್ ಮೂಲಕ ತಿಳಿಸಿ

Continue Reading
Advertisement
Swara Bhaskar angry as news outlet
ಬಾಲಿವುಡ್13 seconds ago

Swara Bhasker: ತೂಕ ಹೆಚ್ಚಾಗಿದ್ದರಿಂದ ಸಿನಿಮಾಗಳಲ್ಲಿ ಕೆಲಸ ಸಿಗುತ್ತಿಲ್ಲ; ಬಾಡಿ ಶೇಮ್‌ ಮಾಡಿದಕ್ಕೆ ಸ್ವರಾ ಭಾಸ್ಕರ್ ಗರಂ!

Election Results 2024
ದೇಶ9 mins ago

Election Results 2024: ಅಸಾದುದ್ದೀನ್‌ ಓವೈಸಿ ವಿರುದ್ಧ ಹಿಂದು ಫೈರ್‌ ಬ್ರ್ಯಾಂಡ್‌ ಮಾಧವಿ ಲತಾಗೆ ಭಾರಿ ಮುನ್ನಡೆ

Election Result 2024
ದೇಶ30 mins ago

Election results 2024: ದಿಲ್ಲಿಯಲ್ಲಿ ಈ ಬಾರಿಯೂ ಕ್ಲೀನ್‌ ಸ್ವೀಪ್‌ ಮಾಡುತ್ತಾ ಬಿಜೆಪಿ? ಏಳೂ ಕ್ಷೇತ್ರಗಳಲ್ಲಿ ಮುನ್ನಡೆ

sensex crashed
ಪ್ರಮುಖ ಸುದ್ದಿ39 mins ago

Sensex Crashed : ಲೋಕ ಸಭಾ ಚುನಾವಣಾ ಫಲಿತಾಂಶದ ಹಿನ್ನೆಲೆಯಲ್ಲಿ ನೆಲಕಚ್ಚಿದ ಷೇರು ಮಾರುಕಟ್ಟೆ

Election Results 2024
ಕರ್ನಾಟಕ47 mins ago

Election Results 2024: ಹಾಸನದಲ್ಲಿ ಜೆಡಿಎಸ್‌ ಮುನ್ನಡೆ; ಪ್ರಜ್ವಲ್ ರೇವಣ್ಣಗೆ ಇಲ್ಲ ಫಲಿತಾಂಶ ನೋಡುವ ಭಾಗ್ಯ!

Andhra Assembly Result 2024
ದೇಶ48 mins ago

AP Election Results 2024 Live: ಆಂಧ್ರ ಪ್ರದೇಶ ವಿಧಾನಸಭೆ; ಎನ್‌ಡಿಎಗೆ ಭರ್ಜರಿ ಮುನ್ನಡೆ

election resluts 2024 nitish kumar tejaswi yadav
ಪ್ರಮುಖ ಸುದ್ದಿ49 mins ago

Election Results 2024: ಬಿಹಾರದಲ್ಲಿ ಕಾಂಗ್ರೆಸ್-ಆರ್‌ಜೆಡಿಗೆ ಭಾರಿ ಹಿನ್ನಡೆ; ಬಿಜೆಪಿ-ಜೆಡಿಯು ಜಯಭೇರಿಯತ್ತ

Election Result 2024
ದೇಶ56 mins ago

Election Results 2024: ವಾರಾಣಸಿಯಲ್ಲಿ ಮೋದಿಗೆ ಆಘಾತ; 6,223 ಮತಗಳ ಹಿನ್ನಡೆ

Urfi Javed shares photos of swollen face, accepts
ಬಾಲಿವುಡ್1 hour ago

Urfi Javed: ಉರ್ಫಿ ಜಾವೇದ್‌ಗೆ ಮುಖ ಹೀಗೆ ಊದಿಕೊಳ್ಳುತ್ತೆ; ಆರೋಗ್ಯ ಸಮಸ್ಯೆಯಿಂದ ಬಳಲ್ತಾ ಇದ್ದಾರೆ ಫ್ಯಾಷನ್‌ ಐಕಾನ್‌!

Odisha Assembly Result 2024
ದೇಶ1 hour ago

Odisha Assembly Result 2024: ಅಸೆಂಬ್ಲಿ ಎಲೆಕ್ಷನ್‌; ಮತ ಎಣಿಕೆ ಶುರು-ಒಡಿಶಾದಲ್ಲಿ ಮತ್ತೆ ಗದ್ದುಗೆ ಏರುತ್ತಾ ಬಿಜೆಡಿ?

Sharmitha Gowda in bikini
ಕಿರುತೆರೆ8 months ago

Geetha Serial Kannada: ನಿದ್ದೆ ಕದ್ದ ಚೋರಿ! ನಟಿ `ಭಾನುಮತಿ’ ಹಾಟ್‌ ಪೋಟೊಗಳಿಗೆ ಫ್ಯಾನ್ಸ್ ಫುಲ್ ಫಿದಾ

Kannada Serials
ಕಿರುತೆರೆ8 months ago

Kannada Serials TRP: 2ನೇ ಸ್ಥಾನದಲ್ಲಿ 2 ಧಾರಾವಾಹಿಗಳು; ಟಿಆರ್‌ಪಿ ರೇಸ್‌ನಲ್ಲಿಲ್ಲ ಭಾಗ್ಯಲಕ್ಷ್ಮೀ!

Bigg Boss- Saregamapa 20 average TRP
ಕಿರುತೆರೆ8 months ago

Kannada Serials TRP: ಏಳನೇ ಸ್ಥಾನಕ್ಕೆ ʻಅಮೃತಧಾರೆʼ ಕುಸಿತ; ಬಿಗ್‌ ಬಾಸ್‌-ಸರಿಗಮಪ ಟಿಆರ್‌ಪಿ ಎಷ್ಟು?

galipata neetu
ಕಿರುತೆರೆ6 months ago

Kanyadana Serial: ಕಿರುತೆರೆಗೆ ಮತ್ತೆ ಎಂಟ್ರಿ ಕೊಟ್ಟ ʻಗಾಳಿಪಟʼ ಖ್ಯಾತಿಯ ʻನೀತುʼ!

Kannada Serials
ಕಿರುತೆರೆ8 months ago

Kannada Serials TRP: ನಾಲ್ಕನೇ ಸ್ಥಾನಕ್ಕೆ ಕುಸಿತ ಕಂಡ ʻಸೀತಾ ರಾಮʼ; ಟಿಆರ್‌ಪಿ ರೇಸ್‌ಗೆ ʻಭಾಗ್ಯಲಕ್ಷ್ಮಿʼ ಬ್ಯಾಕ್‌!

Kannada Serials
ಕಿರುತೆರೆ8 months ago

Kannada Serials TRP: ಟಿಆರ್‌ಪಿಯಲ್ಲಿ ʻಭಾಗ್ಯಲಕ್ಷ್ಮೀʼ ಹವಾ; ʻಪುಟ್ಟಕ್ಕನ ಮಕ್ಕಳುʼ ಧಾರಾವಾಹಿಗೆ ಸಂಕಷ್ಟ!

Bigg Boss' dominates TRP; Sita Rama fell to the sixth position
ಕಿರುತೆರೆ7 months ago

Kannada Serials TRP: ಟಿಆರ್‌ಪಿಯಲ್ಲಿ ʻಬಿಗ್ ಬಾಸ್ʼದೇ ಮೇಲುಗೈ; 6ನೇ ಸ್ಥಾನಕ್ಕೆ ಕುಸಿದ ʻಸೀತಾ ರಾಮʼ

geetha serial Dhanush gowda engagement
ಕಿರುತೆರೆ6 months ago

Dhanush Gowda: ಗೀತಾ ಧಾರಾವಾಹಿ ನಟನ ನಿಶ್ಚಿತಾರ್ಥ; ಭವ್ಯಾಳ ಕಮೆಂಟ್‌ ಬಾಕ್ಸ್‌ ಆಫ್‌!

varun
ಕಿರುತೆರೆ7 months ago

Brindavana Serial: ʼಬೃಂದಾವನʼ ಧಾರಾವಾಹಿಯಲ್ಲಿ ದೊಡ್ಡ ಟ್ವಿಸ್ಟ್‌; ಪ್ರಮುಖ ಪಾತ್ರಧಾರಿಯೇ ಬದಲು

Kannada Serials
ಕಿರುತೆರೆ9 months ago

Kannada Serials TRP: ಟಿಆರ್‌ಪಿಯಲ್ಲಿ ಏರಿಕೆ ಕಂಡ ʻಅಮೃತಧಾರೆʼ; ʻಗಟ್ಟಿಮೇಳʼಕ್ಕೆ ನಾಲ್ಕನೇ ಸ್ಥಾನ!

Lok Sabha Election Result 2024 Live
ದೇಶ4 hours ago

Lok Sabha Election Result 2024 Live: ಲೋಕಸಭೆ ಚುನಾವಣೆ ಫಲಿತಾಂಶದ ಲೈವ್‌ ಇಲ್ಲಿ ವೀಕ್ಷಿಸಿ

Karnataka Rain
ಮಳೆ19 hours ago

Karnataka Rain : 133 ವರ್ಷದ ರೆಕಾರ್ಡ್ ಬ್ರೇಕ್ ಮಾಡಿದ ʻಬೆಂಗಳೂರು ಮಳೆʼ

Snake Rescue Snakes spotted in heavy rain
ಮಳೆ19 hours ago

Snake Rescue: ಮಳೆ ನೀರಿನಲ್ಲಿ ಹರಿದು ಬಂದು ಬೈಕ್‌ನಲ್ಲಿ ಸೇರಿಕೊಂಡ ಹಾವು; ಮನೆಗಳಲ್ಲೂ ಪ್ರತ್ಯಕ್ಷ

Karnataka Rain
ಮಳೆ2 days ago

Karnataka Rain : ವೀಕೆಂಡ್‌ ಮೋಜಿಗೆ ವರುಣ ಅಡ್ಡಿ; ಭಾನುವಾರ ಸಂಜೆಗೆ ಮಳೆ ಕಾಟ

Liquor ban
ಬೆಂಗಳೂರು3 days ago

Liquor Ban : ಮುಂದಿನ ಏಳು ದಿನಗಳಲ್ಲಿ ನಾಲ್ಕೂವರೆ ದಿನ ಬಾರ್ ಕ್ಲೋಸ್; ಎಣ್ಣೆ ಸಿಗೋದು ಯಾವ ದಿನ?

Assault Case in Shivamogga
ಕ್ರೈಂ5 days ago

Assault Case : ಶಿವಮೊಗ್ಗದಲ್ಲಿ ಮತ್ತೆ ಬಾಲ ಬಿಚ್ಚಿದ ಪುಂಡರು; ಗಾಂಜಾ ನಶೆಯಲ್ಲಿ ವಾಹನಗಳು ಪೀಸ್‌ ಪೀಸ್‌

Karnataka weather Forecast
ಮಳೆ7 days ago

Karnataka Weather : ಚಿಕ್ಕಮಗಳೂರಲ್ಲಿ ಭಾರಿ ಮಳೆ; ಯಾದಗಿರಿಯಲ್ಲಿ ಕರೆಂಟ್‌ ಕಟ್‌, ಜನರೇಟರ್‌ನಿಂದ ಮೊಬೈಲ್‌ಗಳಿಗೆ ಚಾರ್ಜಿಂಗ್‌!

tumkur murder
ತುಮಕೂರು7 days ago

Tumkur Murder : ಮಗುವಿನ ಮುಂದೆಯೇ ಹೆಂಡತಿಯ ಕತ್ತು, ದೇಹವನ್ನು ಕತ್ತರಿಸಿ ಬಿಸಾಡಿದ ದುಷ್ಟ

Karnataka Weather Forecast
ಮಳೆ1 week ago

Karnataka Weather : ಕಡಲತೀರದಲ್ಲಿ ಅಲೆಗಳ ಅಬ್ಬರ, ಪ್ರವಾಸಿಗರಿಗೆ ಕಟ್ಟೆಚ್ಚರ; ನಾಳೆಯೂ ಗಾಳಿ ಸಹಿತ ಮಳೆ ಅಬ್ಬರ

Karnataka Rain
ಮಳೆ1 week ago

Karnataka Rain : ಯಾದಗಿರಿಯಲ್ಲಿ ಬಿರುಗಾಳಿ ಸಹಿತ ಮಳೆ; ಸಿಡಿಲು ಬಡಿದು ಎಮ್ಮೆಗಳು ಸಾವು

ಟ್ರೆಂಡಿಂಗ್‌