Free Bus Service: ಸೀಟಿಲ್ಲ ಎಂದು ಬಸ್‌ ನಿಲ್ಲಿಸದೇ ಹೋಗಿದ್ದ ಕಂಡಕ್ಟರ್‌ ಮೇಲೆ ಸಿಟ್ಟಲ್ಲಿ ಹಲ್ಲೆ; ನಾಲ್ವರ ಸೆರೆ - Vistara News

ಕರ್ನಾಟಕ

Free Bus Service: ಸೀಟಿಲ್ಲ ಎಂದು ಬಸ್‌ ನಿಲ್ಲಿಸದೇ ಹೋಗಿದ್ದ ಕಂಡಕ್ಟರ್‌ ಮೇಲೆ ಸಿಟ್ಟಲ್ಲಿ ಹಲ್ಲೆ; ನಾಲ್ವರ ಸೆರೆ

Congress Guarantee: ಶಕ್ತಿ ಯೋಜನೆ ಜಾರಿಗೆ ಬಂದ ಮೇಲೆ ಗೊಂದಲಗಳು, ಗಲಾಟೆಗಳು ನಡೆಯುತ್ತಲೇ ಇವೆ. ಇದರಿಂದ ಸಾರಿಗೆ ಸಿಬ್ಬಂದಿ ಹೈರಾಣಾಗುತ್ತಿದ್ದಾರೆ. ಸೀಟಿಲ್ಲ ಎಂದು ಹೇಳಿ ಬಸ್‌ ನಿಲ್ಲಸದೇ ಹೋಗಿದ್ದಕ್ಕಾಗಿ ಮಹಿಳೆಯೊಬ್ಬರು ತಮ್ಮ ಸಂಬಂಧಿಕರನ್ನು ಕರೆದುಕೊಂಡು ಬಂದು ಬಸ್‌ ಅನ್ನು ಅಡ್ಡಗಟ್ಟಿ ಥಳಿಸಿದ್ದಾರೆ. ಈ ಪ್ರಕರಣ ಸಂಬಂಧ ನಾಲ್ವರನ್ನು ಬಂಧಿಸಲಾಗಿದೆ.

VISTARANEWS.COM


on

Four held for assaulting conductor in chellakere
ಮಹತ್ವದ, ಕುತೂಹಲಕರ ಸುದ್ದಿಗಾಗಿ ಫಾಲೊ ಮಾಡಿ
Koo

ಚಿತ್ರದುರ್ಗ: ರಾಜ್ಯ ಸರ್ಕಾರದ ಶಕ್ತಿ ಯೋಜನೆ (Free Bus Service) ಬಂದ ಮೇಲೆ ಬಸ್‌ನಲ್ಲಿ ಮಹಿಳೆಯರ ಸಂಚಾರ ಹೆಚ್ಚಳವಾಗಿದೆ. ಈ ನಡುವೆ ಸಾಕಷ್ಟು ಅವಾಂತರಗಳೂ ಇದರಿಂದ ನಡೆಯುತ್ತಿದೆ. ಇದೇ ವೇಳೆ ದಾಬಸ್‌ಪೇಟೆಯಲ್ಲಿ ಸೀಟಿಲ್ಲ ಎಂಬ ಕಾರಣ ನೀಡಿ ಮಹಿಳೆಯೊಬ್ಬರಿಗೆ ನಿರ್ವಾಹಕ (Bus Conductor) ಬಸ್‌ ನಿಲ್ಲಿಸದೆ ಹೋಗುವಂತೆ ಚಾಲಕನಿಗೆ ಸೂಚಿಸಿದ್ದಾರೆ. ಇದ್ದಕ್ಕೆ ಆಕ್ರೋಶಗೊಂಡಿದ್ದ ಮಹಿಳೆಯೊಬ್ಬಳು ಮರುದಿನ ಸಂಬಂಧಿಕರ ಜತೆಗೆ ಬಂದು ಚಳ್ಳಕೆರೆಯಲ್ಲಿ ಕೆಎಸ್‌ಆರ್‌ಟಿಸಿ ಬಸ್‌ ತಡೆದಿದ್ದಲ್ಲದೆ, ಅವರ ಮೇಲೆ ಹಲ್ಲೆ ನಡೆಸಿದ್ದರು. ಈ ಪ್ರಕರಣ ಸಂಬಂಧ ಚಳ್ಳಕೆರೆ ಪೊಲೀಸರು ನಾಲ್ಕು ಮಂದಿಯನ್ನು ಬಂಧಿಸಿದ್ದಾರೆ.

ನಿರ್ವಾಹಕನ ಮೇಲೆ ಹಲ್ಲೆ ಮಾಡಿದ ಚಂದ್ರಿಕಾ, ಮಲ್ಲಿಕಾರ್ಜುನ್, ಶಿವರಾಜ್, ನವೀನ್ ಎಂಬುವವರನ್ನು ಪೊಲೀಸರು ಬಂಧಿಸಿದ್ದಾರೆ. ದಾಬಸ್‌ಪೇಟೆ ಬಳಿ ಬಸ್ ನಿಲ್ಲಿಸಲಿಲ್ಲ ಎಂದು ಹಲ್ಲೆ ನಡೆಸಿದ್ದಾರೆ. ಅಲ್ಲದೆ, ಅವಾಚ್ಯ ಶಬ್ದಗಳಿಂದ ನಿಂದಿಸಿದ್ದಾರೆ ಎಂದು ಬಸ್‌ ಕಂಡಕ್ಟರ್‌ ಚಂದ್ರೇಗೌಡ ದೂರು ನೀಡಿದ್ದರು.

ದೂರು ದಾಖಲು ಮಾಡಿಕೊಂಡಿದ್ದ ಚಳ್ಳಕೆರೆ ಪೊಲೀಸರು ತನಿಖೆ ನಡೆಸಿ, ನಾಲ್ವರು ಆರೋಪಿಗಳನ್ನು ಬಂಧಿಸಿದ್ದಾರೆ. ಚಳ್ಳಕೆರೆ ನಗರದ ನೆಹರೂ ಸರ್ಕಲ್‌ನಲ್ಲಿ ಹಲ್ಲೆ ನಡೆದಿತ್ತು.

ಏನಿದು ಘಟನೆ?

ಸಾರಿಗೆ ಬಸ್ ಬುಧವಾರ ರಾಯದುರ್ಗದಿಂದ ಬೆಂಗಳೂರು ಕಡೆಗೆ ಹೋಗುತ್ತಿತ್ತು. ದಾಬಸ್ ಪೇಟೆಯಿಂದ ಬರುವಾಗ ಮಹಿಳೆಯೊಬ್ಬರು ಬಸ್‌ಗೆ ಕೈ ಅಡ್ಡ ಮಾಡಿದ್ದಾರೆ. ಆಗ ಕಂಡಕ್ಟರ್‌ ಬಸ್‌ನಲ್ಲಿ ಸೀಟ್‌ ಇಲ್ಲ ಎಂದು ಹೇಳಿ ಬಸ್‌ ನಿಲ್ಲಿಸದೇ ಹೋಗಿದ್ದಾರೆ ಎಂದು ಆರೋಪಿಸಲಾಗಿದೆ.

ಸೀಟ್‌ ಇಲ್ಲ ಎಂದು ಹೇಳಿ ಸ್ಟಾಪ್‌ ಕೊಡದೇ ಕಂಡಕ್ಟರ್‌ ಬಸ್‌ ಅನ್ನು ಮುಂದಕ್ಕೆ ಹೋಗಲು ಹೇಳಿದ್ದಕ್ಕೆ ತೀವ್ರ ಆಕ್ರೋಶಗೊಂಡ ಮಹಿಳೆಯು ಈ ವಿಷಯವನ್ನು ತನ್ನ ಸಂಬಂಧಿಕರಿಗೆ ತಿಳಿಸಿದ್ದಾಳೆ. ಇದರಿಂದ ರೊಚ್ಚಿಗೆದ್ದ ಸಂಬಂಧಿಕರು ಆಕೆಯನ್ನು ಕರೆದುಕೊಂಡು ಗುರುವಾರ ಬಸ್‌ ಅನ್ನು ಫಾಲೋ ಮಾಡಿಕೊಂಡು ಬಂದಿದ್ದಾರೆ. ಚಳ್ಳಕೆರೆಯಲ್ಲಿ ಆ ಬಸ್‌ ಅನ್ನು ತಡೆದಿದ್ದಾರೆ. ಈ ವೇಳೆಯೇ ಗಲಾಟೆ ನಡೆದಿತ್ತು.

ಬಸ್‌ನಿಂದ ನಿರ್ವಾಹಕರನ್ನು ಕೆಳಕ್ಕೆ ಇಳಿಸಿ ಮೊದಲಿಗೆ ವಿಚಾರಿಸಿದ್ದಾರೆ. ಬುಧವಾರ ಏಕೆ ಬಸ್‌ ನಿಲ್ಲಿಸಲಿಲ್ಲ ಎಂದು ಪ್ರಶ್ನೆ ಮಾಡಿದ್ದಾರೆ. ಈ ವೇಳೆ ನಿರ್ವಾಹಕರಿಗೆ ಮತ್ತು ಬಂದಿದ್ದ ಯುವಕರ ಮಧ್ಯೆ ವಾಗ್ವಾದ ಆಗಿದೆ. ಕೊನೆಗೆ ಸಿಟ್ಟಿಗೆದ್ದ ಯುವಕರು ಏಕಾಏಕಿ ನಿರ್ವಾಹಕನ ಮೇಲೆ ಹಲ್ಲೆ ಮಾಡಿದ್ದರು.

ಪದೇ ಪದೆ ಹೊಡೆದರು

ಒಮ್ಮೆಲೆಗೆ ತಮ್ಮ ಮೇಲೆ ಹಲ್ಲೆ ಮಾಡುತ್ತಿದ್ದರಿಂದ ಸಿಟ್ಟಿಗೆದ್ದ ನಿರ್ವಾಹಕರು ಅದನ್ನು ಪ್ರಶ್ನೆ ಮಾಡಿದ್ದರು. ಇದರಿಂದ ಮತ್ತಷ್ಟು ಕೋಪಗೊಂಡ ಯುವಕರು, ಮತ್ತೆ ಮತ್ತೆ ಹಲ್ಲೆ ಮಾಡಿದ್ದಾರೆ. ಬಸ್‌ನ ಉದ್ದಕ್ಕೂ ಕರೆದುಕೊಂಡು ಹೋಗಿ ಹೊಡೆದಿದ್ದರು. ಜತೆಗೆ ಅವಾಚ್ಯ ಶಬ್ದಗಳಿಂದ ನಿಂದಿಸಿದ್ದರು.

ಸಹಾಯಕ್ಕೆ ಬಾರದ ಪ್ರಯಾಣಿಕರು, ಸಾರ್ವಜನಿಕರು

ಯುವಕರ ಗುಂಪೊಂದು ಹೀಗೆ ಹಲ್ಲೆ ಮಾಡುತ್ತಿದ್ದರೂ ಯಾರೂ ಸಹ ಇವರ ಸಹಾಯಕ್ಕೆ ಬಾರಲೇ ಇಲ್ಲ. ಎಲ್ಲರೂ ಬಸ್‌ನ ಕಿಟಕಿಯಿಂದ ವೀಕ್ಷಿಸಿದರೆ, ಮತ್ತೆ ಹೊರಗಡೆ ಇದ್ದವರು ನೋಡುತ್ತಾ ನಿಂತಿದ್ದರು. ಇನ್ನು ಕೆಲವರು ಇದನ್ನು ವಿಡಿಯೊ ಮಾಡಿಕೊಂಡಿದ್ದಾರೆ. ಈ ವಿಡಿಯೊ ಈಗ ಸೋಷಿಯಲ್‌ ಮೀಡಿಯಾದಲ್ಲಿ ಹರಿದಾಡುತ್ತಿದ್ದು, ಸಖತ್‌ ವೈರಲ್‌ ಆಗಿದೆ.

ನಿರ್ವಾಹಕನ ಮೇಲೆ ಹಲ್ಲೆ ಮಾಡಿದ ಯುವಕರ ಗುಂಪು- ಇಲ್ಲಿದೆ ವಿಡಿಯೊ

ಪ್ರಯಾಣ ಸ್ಥಗಿತ

ಕಂಡಕ್ಟರ್‌ಗೆ ಯುವಕರ ಗುಂಪು ಥಳಿಸಿದ ಹಿನ್ನೆಲೆಯಲ್ಲಿ ಪ್ರಯಾಣವನ್ನು ಸ್ಥಗಿತ ಮಾಡಿದ ಆ ಬಸ್‌ನ ಸಾರಿಗೆ ಸಿಬ್ಬಂದಿ ಸೀದಾ ಬಸ್‌ ಅನ್ನು ಸ್ಥಳೀಯ ಪೊಲೀಸ್ ಠಾಣೆಗೆ ಚಲಾಯಿಸಿಕೊಂಡು ಹೋಗಿದ್ದರು. ಅಲ್ಲಿ ಕೆಲ ಕಾಲ ಪೊಲೀಸರ ಜತೆ ಮಾತನಾಡಿ, ದೂರು ನೀಡಿದ್ದರು. ಬಳಿಕ ಅಲ್ಲಿಂದ ತೆರಳಿದ್ದರು. ಈಗ ನಾಲ್ವರು ಆರೋಪಿಗಳನ್ನು ಪೊಲೀಸರು ಬಂಧಿಸಿದ್ದಾರೆ.

ಕ್ಷಣ ಕ್ಷಣದ ಮಾಹಿತಿಗಾಗಿ Vistara News FaceBook ಪೇಜ್ ಫಾಲೋ ಮಾಡಿ
ಮಹತ್ವದ ಮಾಹಿತಿಗಾಗಿ ವಿಸ್ತಾರ ನ್ಯೂಸ್ ಆ್ಯಪ್ ಉಚಿತವಾಗಿ ಡೌನ್ ಲೋಡ್ ಮಾಡಿಕೊಳ್ಳಿ: Andriod App | IOS App
Continue Reading
Click to comment

Leave a Reply

Your email address will not be published. Required fields are marked *

ಪ್ರಮುಖ ಸುದ್ದಿ

Swamji Murder : ಆಸ್ತಿ, ಅಧಿಕಾರಕ್ಕಾಗಿ ಗಲಾಟೆ; ಸ್ವಾಮೀಜಿಯೊಬ್ಬರನ್ನು ಕೊಲೆ ಮಾಡಿದ ಸ್ವಾಮೀಜಿಗಳ ಗುಂಪು

Swamji Murder : ಕೋಲಾರ ಜಿಲ್ಲೆ ಮಾಲೂರು ತಾಲೂಕಿನ ಸಂತೆ ಕ್ರಾಸ್ ಬಳಿ ಇರುವ ಆನಂದ ಮಾರ್ಗ ಪಾಲಿಟೆಕ್ನಿಕ್ ಕಾಲೇಜಿನ ಬಳಿ ಕೊಲೆನಡೆದಿದೆ. ಧರ್ಮಪ್ರಾಣಾನಂದ ಸ್ವಾಮಿ, ಪ್ರಸನ್ನೇಶ್ವರನಂದ ಸ್ವಾಮಿ ಹಾಗೂ ಅರುಣ್ ಕುಮಾರ್ ಕೊಲೆ ಆರೋಪಿಗಳು. ಘಟನೆ ಬಳಿಕ ಅವರು ಪರಾರಿಯಾಗಿದ್ದಾರೆ.

VISTARANEWS.COM


on

Swamji Murder
Koo

ಕೋಲಾರ: ಆಸ್ತಿ ಮತ್ತು ಅಧಿಕಾರಕ್ಕಾಗಿ ಸ್ವಾಮೀಜಿಗಳ ನಡುವೆ ನಡೆಯುತ್ತಿದ್ದ ಗಲಾಟೆಯೊಂದು ಸ್ವಾಮೀಜಿಯೊಬ್ಬರ ಕೊಲೆಯಲ್ಲಿ (Swamji Murder) ಅಂತ್ಯಗೊಂಡಿದೆ. ಕೋಲಾರ ಜಿಲ್ಲೆಯ ಮಾಲೂರು ತಾಲೂಕಿನ ಆನಂದ ಮಾರ್ಗ ಆಶ್ರಮದಲ್ಲಿ ಶನಿವಾರ ಈ ಘಟನೆ ನಡೆದಿದೆ. 65 ವರ್ಷದ ಚಿನ್ಮಯಾನಂದ ಸ್ವಾಮೀಜಿ ಮೃತಪಟ್ಟವರು. ಅವರನ್ನು ಸ್ವಾಮೀಜಿಗಳ ಗುಂಪೊಂದು ಬೆನ್ನಟ್ಟಿ ದೊಣ್ಣೆ ಹಾಗೂ ಬಡಿಗೆಗಳಿಂದ ಹೊಡೆದು ಕೊಲೆ ಮಾಡಿದೆ.

ಕೋಲಾರ ಜಿಲ್ಲೆ ಮಾಲೂರು ತಾಲೂಕಿನ ಸಂತೆ ಕ್ರಾಸ್ ಬಳಿ ಇರುವ ಆನಂದ ಮಾರ್ಗ ಪಾಲಿಟೆಕ್ನಿಕ್ ಕಾಲೇಜಿನ ಬಳಿ ಕೊಲೆನಡೆದಿದೆ. ಧರ್ಮಪ್ರಾಣಾನಂದ ಸ್ವಾಮಿ, ಪ್ರಸನ್ನೇಶ್ವರನಂದ ಸ್ವಾಮಿ ಹಾಗೂ ಅರುಣ್ ಕುಮಾರ್ ಕೊಲೆ ಆರೋಪಿಗಳು. ಘಟನೆ ಬಳಿಕ ಅವರು ಪರಾರಿಯಾಗಿದ್ದಾರೆ. ಆಶ್ರಮದ ಆಸ್ತಿ ಹಾಗೂ ಅಧಿಕಾರಕ್ಕಾಗಿ ಕೊಲೆಯಾದ ಸ್ವಾಮೀಜಿ ಹಾಗೂ ಕೊಲೆ ಮಾಡಿರುವ ಗುಂಪಿನ ನಡುವೆ ಸುಮಾರು ಹಲವು ವರ್ಷಗಳಿಂದ ಗಲಾಟೆ ನಡೆಯುತ್ತಿದೆ. ಕಳೆದ ಹತ್ತು ವರ್ಷಗಳ ಹಿಂದೆ ಮೃತ ಸ್ವಾಮೀಜಿಯ ಮೇಲೆ ಗುಂಡಿನ ದಾಳಿಯೂ ನಡೆದಿತ್ತು. ಈ ವೇಳೆ ಅವರು ಪಾರಾಗಿದ್ದಾರೆ. ಶನಿವಾರ ಅವರು ಒಪ್ಪರೇ ಇರುವ ಸಮಯದಲ್ಲಿ ದಾಳಿ ಮಾಡಿದ ಆರೋಪಿಗಳು ಗಂಭೀರವಾಗಿ ಹಲ್ಲೆ ನಡೆಸಿ ಕೊಲೆ ಮಾಡಿದ್ದಾರೆ. ಮಾಲೂರು ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ತಲೆಮೆರೆಸಿಕೊಂಡಿರುವ ಆರೋಪಿಗಳಿಗಾಗಿ ಶೋಧ ನಡೆಸುತ್ತಿದ್ದಾರೆ.

ಇದನ್ನೂ ಓದಿ: Actor Darshan: ನಾನು ದರ್ಶನ್ ಸೇಫ್ ಮಾಡ್ತಿರೋದು ಸುಳ್ಳು; ಬಿಜೆಪಿ ಶಾಸಕ ಸತೀಶ್ ರೆಡ್ಡಿ !

ಹಾವೇರಿಯಲ್ಲಿ ದೊಣ್ಣೆಯಿಂದ ಹೊಡೆದು ಪತ್ನಿಯನ್ನೇ ಕೊಂದ ವೃದ್ಧ

ಹಾವೇರಿ: ಗಂಡ-ಹೆಂಡತಿ ಜಗಳ ಉಂಡು ಮಲಗುವ ತನಕ ಎಂಬ ಮಾತಿದೆ. ಆದರೆ ಈ ಮಾತಿಗೆ ತದ್ವಿರುದ್ಧ ಎಂಬಂತೆ ಸಣ್ಣದಾಗಿ ಶುರುವಾದ ಜಗಳವು ವಿಕೋಪಕ್ಕೆ ತಿರುಗಿದ್ದು, ವೃದ್ಧರೊಬ್ಬರು ತಮ್ಮ ಪತ್ನಿಯನ್ನು ದೊಣ್ಣೆಯಿಂದ ಹೊಡೆದು (Murder case) ಕೊಂದಿದ್ದಾರೆ. ಹಾವೇರಿ ಜಿಲ್ಲೆಯ ಹಾನಗಲ್ ತಾಲೂಕಿನ ಶಿವಪುರದಲ್ಲಿ ಘಟನೆ ನಡೆದಿದೆ.

ಪತಿ-ಪತ್ನಿ ಜಗಳವು ಕೊಲೆಯಲ್ಲಿ ಅಂತ್ಯವಾಗಿದೆ. ನಾಗವ್ವ (58) ಪತಿಯಿಂದಲೇ ಕೊಲೆಯಾದವರು. ಶೇಖಪ್ಪ (60) ಪತ್ನಿಯನ್ನೇ ಕೊಂದ ಆರೋಪಿಯಾಗಿದ್ದಾರೆ. ಕಳೆದ ರಾತ್ರಿ ನಾಗವ್ವ ಹಾಗೂ ಶೇಖಪ್ಪ ನಡುವೆ ಜಗಳ ನಡೆದಿತ್ತು. ಜಗಳ ವಿಕೋಪಕ್ಕೆ ತಿರುಗಿದ್ದು ಸಿಟ್ಟಿನಲ್ಲಿ ಶೇಖಪ್ಪ ಮನೆಯಲ್ಲಿದ್ದ ದೊಣ್ಣೆಯಿಂದ ನಾಗವ್ವಳ ತಲೆಗೆ ಹೊಡೆದಿದ್ದಾರೆ. ಒಂದೇ ಏಟಿಗೆ ಕುಸಿದು ಬಿದ್ದ ನಾಗವ್ವ ತೀವ್ರ ರಕ್ತಸ್ರಾವವಾಗಿ ಗಂಭೀರ ಗಾಯಗೊಂಡು ಸ್ಥಳದಲ್ಲೇ ಮೃತಪಟ್ಟಿದ್ದಾರೆ.

ವಿಷಯ ತಿಳಿಯುತ್ತಿದ್ದಂತೆ ಸ್ಥಳಕ್ಕಾಗಮಿಸಿದ ಹಾನಗಲ್ ಪೊಲೀಸರು ಪರಿಶೀಲನೆ ನಡೆಸಿ, ಮೃತದೇಹವನ್ನು ಮರಣೋತ್ತರ ಪರೀಕ್ಷೆಗೆ ರವಾನಿಸಿದ್ದಾರೆ. ಹಾನಗಲ್‌ ಠಾಣೆಯಲ್ಲಿ ಈ ಸಂಬಂಧ ಪ್ರಕರಣ ದಾಖಲಾಗಿದೆ. ಆರೋಪಿ ಶೇಖಪ್ಪನನ್ನು ಪೊಲೀಸರು ಬಂಧಿಸಿದ್ದು, ತನಿಖೆಯನ್ನು ಮುಂದುವರಿಸಿದ್ದಾರೆ.

ತಂದೆಯನ್ನೇ ಕೊಂದ ಅಪ್ರಾಪ್ತ ಮಗ

ಮಗನೊಬ್ಬ ತನ್ನ ತಂದೆಗೆ ಚೂರಿಯಿಂದ ಇರಿದು ಕೊಲೆ ಮಾಡಿರುವ ಘಟನೆ ಶಿವಮೊಗ್ಗದ ಹೊಳೆಹೊನ್ನೂರಿನ ಅರಬಿಳಚಿ ಗ್ರಾಮದಲ್ಲಿ ನಡೆದಿದೆ. ಸುಕ್ ರಾಜ್(53) ಕೊಲೆಯಾದವರು.

ಸುಕ್‌ ರಾಜ್‌ ಟ್ರ್ಯಾಕ್ಟರ್ ಡ್ರೈವರ್ ಆಗಿ ಕೆಲಸ ಮಾಡುತ್ತಿದ್ದರು. ನಿನ್ನೆ ರಾತ್ರಿ ಸುಕ್‌ ರಾಜ್‌ ತಮ್ಮ ಪತ್ನಿ ಜತೆಗೆ ಜಗಳವಾಡಿದ್ದರು. ಜಗಳ ವಿಚಾರಕ್ಕೆ ಸಿಟ್ಟಾ ಮಗ ತಂದೆಗೆ ಚಾಕುವಿನಿಂದ ಇರಿದು ಕೊಂದಿದ್ದಾನೆ. ಗಾಂಜಾ ಸೇವಿಸಿ ಕೊಲೆ ಮಾಡಿರುವ ಆರೋಪ ಕೇಳಿ ಬಂದಿದೆ. ಹೊಳೆಹೊನ್ನೂರು ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಮೃತದೇಹವನ್ನು ಮರಣೋತ್ತರ ಪರೀಕ್ಷೆಗೆ ರವಾನಿಸಲಾಗಿದೆ.

Continue Reading

ಬೆಳಗಾವಿ

Child Death : ಮಕ್ಕಳ ಮಾರಾಟ ಜಾಲದಲ್ಲಿ ರಕ್ಷಣೆಯಾಗಿದ್ದ ಮಗು ಮೃತ್ಯು; ಅಂತ್ಯ ಸಂಸ್ಕಾರ ನೆರವೇರಿಸಿದ ಪೊಲೀಸರು

Child Trafficking : ಯುವತಿಯೊಬ್ಬಳು ಮದುವೆಗೂ ಮುನ್ನವೇ ಗರ್ಭ ಧರಿಸಿದ್ದಳು. ನಕಲಿ ವೈದ್ಯನೊಬ್ಬ ಹಣದಾಸೆಗೆ ಆಪರೇಷನ್ ಮಾಡಿ, ಕೆಲ ದಿನಗಳ ಕಾಲ ಶಿಶುವನ್ನು ತನ್ನಲ್ಲಿರಿಸಿಕೊಂಡು ಪೋಷಿಸಿ ಮಾರಾಟ (Child Death) ಮಾಡಿದ್ದ. ಆದರೆ ಮಕ್ಕಳ ಮಾರಾಟ ಪ್ರಕರಣದಲ್ಲಿ ರಕ್ಷಣೆಯಾಗಿದ್ದ ಆ ಮಗು ಮೃತಪಟ್ಟಿದೆ.

VISTARANEWS.COM


on

By

Child Death
Koo

ಬೆಳಗಾವಿ: ಬೆಳಗಾವಿಯಲ್ಲಿ ಮಕ್ಕಳ ಮಾರಾಟ ಪ್ರಕರಣದಲ್ಲಿ ರಕ್ಷಣೆಯಾಗಿದ್ದ ಮಗುವೊಂದು (Child Death) ಮೃತಪಟ್ಟಿದೆ. ತಡರಾತ್ರಿ ಬೆಳಗಾವಿಯ ಜಿಲ್ಲಾಸ್ಪತ್ರೆಯಲ್ಲಿ ಹಸುಳೆ ಜೀವ ಬಿಟ್ಟಿದೆ. 30 ದಿನದ ಹೆಣ್ಣು ಮಗುವನ್ನು ಕೇವಲ 60 ಸಾವಿರ ರೂ.ಗೆ ನಕಲಿ ವೈದ್ಯನೊಬ್ಬ ಮಾರಾಟ (Child Trafficking) ಮಾಡಿದ್ದ.

ಅಬ್ದುಲ್ ಗಫಾರ್ ಲಾಡಖಾಕ್‌ ಎಂಬಾತ ನರ್ಸ್ ಮಹಾದೇವಿ ಎಂಬಾಕೆಗೆ ಮಗುವನ್ನು ಮಾರಾಟ ಮಾಡಿದ್ದ. ಮಗು ಪಡೆದು ಬೆಳಗಾವಿಯಲ್ಲಿ ಮಾರಾಟ ಮಾಡುವಾಗ ಮಹಾದೇವಿ ಸಿಕ್ಕಿ ಬಿದ್ದಿದ್ದಳು. ಈ ವೇಳೆ ಮಗುವನ್ನು ರಕ್ಷಿಸಿ ಜಿಲ್ಲಾಸ್ಪತ್ರೆಯಲ್ಲಿ ಆರೈಕೆಗೆಂದು ಇರಿಸಲಾಗಿತ್ತು. ಆದರೆ ಬೆಳವಣಿಗೆ ಕುಂಠಿತ ಹಾಗೂ ತೂಕ ಹೆಚ್ಚಳವಾಗದೆ ಅನಾರೋಗ್ಯದಿಂದ ತಿಂಗಳ ಕೂಸು ಮೃತಪಟ್ಟಿದೆ.

ಇನ್ನೂ ಪೊಲೀಸರು ಹಾಗೂ ಮಗುವಿನ ತಂದೆ- ತಾಯಿ ಸಮ್ಮುಖದಲ್ಲಿ ಸಂಪ್ರದಾಯದಂತೆ ಸದಾಶಿವ ನಗರದ ರುಧ್ರಭೂಮಿಯಲ್ಲಿ ಸಂಸ್ಕಾರ ಮಾಡಿದ್ದರು. ತಾವೇ ತಮ್ಮ ಕೈಯಿಂದ ಹಣ ಹಾಕಿ ಮಗುವಿನ ಅಂತ್ಯ ಸಂಸ್ಕಾರವನ್ನು ಮಾಳಮಾರುತಿ ಪೊಲೀಸರು ನೆರವೇರಿಸಿದ್ದಾರೆ.

ಯುವತಿಯೊಬ್ಬಳು ಮದುವೆಗೂ ಮುನ್ನವೇ ಗರ್ಭ ಧರಿಸಿದ್ದಳು. ಆದಾಗಲೇ ಶಿಶುವಿಗೆ 7 ತಿಂಗಳಾಗಿತ್ತು. ಆಕೆಯಿದ್ದ 20 ಸಾವಿರ ರೂ. ಹಣ ಪಡೆದ ನಕಲಿ ವೈದ್ಯ ಆಪರೇಷನ್ ಮಾಡಿದ್ದ. ಕೆಲ ದಿನಗಳ ಕಾಲ ಶಿಶುವನ್ನು ತನ್ನಲ್ಲಿರಿಸಿಕೊಂಡು ಪೋಷಿಸಿ ನಂತರ ಮಗುವನ್ನು ಮಾರಾಟ ಮಾಡಿದ್ದ. ಆದರೆ ನಕಲಿ ವೈದ್ಯ ಹಾಗೂ ಮಾರಾಟ ಜಾಲದ ಹಣದಾಸೆಗೆ ಕಂದಮ್ಮವೊಂದು ಬಲಿಯಾಗಿದ್ದು ದುರಂತ.

ಇದನ್ನೂ ಓದಿ: Viral Video: ಮತ್ತೊಂದು ರೀಲ್‌ ಕ್ರೇಜ್‌; ಚಲಿಸುವ ರೈಲಿನಲ್ಲಿ ಯುವತಿಯ ಡೇಂಜರಸ್‌ ಡ್ಯಾನ್ಸ್‌!

ಭ್ರೂಣಹತ್ಯೆ ಮಾಡಿದ್ದ ನಕಲಿ ವೈದ್ಯ

ಜಿಲ್ಲೆಯ ಕಿತ್ತೂರು ಪಟ್ಟಣದಲ್ಲಿ ನಕಲಿ ವೈದ್ಯ ಅಬ್ದುಲ್‌ ಗಫಾರ್‌ ಲಾಡಖಾನ್‌ ಎಂಬಾತನು ಭ್ರೂಣಹತ್ಯೆ ಮಾಡಿದ್ದು, ಜಿಲ್ಲೆಯ ಕಿತ್ತೂರು ತಾಲೂಕಿನ ತಿಗಡೊಳ್ಳಿ ಗ್ರಾಮದ ಫಾರ್ಮ್‌ಹೌಸ್‌ನಲ್ಲಿ ಭ್ರೂಣದ ಶವವೊಂದು ಪತ್ತೆಯಾಗಿತ್ತು. ಇನ್ನಷ್ಟು ಭ್ರೂಣಗಳಿಗಾಗಿ ಶೋಧ ಕಾರ್ಯಾಚರಣೆ ಮುಂದುವರಿದಿತ್ತು.

ನಕಲಿ ವೈದ್ಯ ಅಬ್ದುಲ್‌ ಗಫಾರ್‌ ಲಾಡಖಾನ್‌ನ ಜಮೀನಿನಲ್ಲಿ ಭ್ರೂಣದ ಶವ ಪತ್ತೆಯಾಗಿತ್ತು. ಡಿಎಚ್ಒ ಡಾ.ಮಹೇಶ ಕೋಣಿ, ಎಸಿ ಪ್ರಭಾವತಿ ಫಕೀರಪುರ, ಡಿಎಎಸ್‌ಪಿ ರವಿ ನಾಯ್ಕ ನೇತೃತ್ವದಲ್ಲಿ ಶೋಧ ಕಾರ್ಯ ನಡೆಸಲಾಗಿತ್ತು. ಇನ್ನೂ ಭ್ರೂಣಗಳನ್ನು ಹೂಳುತ್ತಿದ್ದ ಸಹಾಯಕ ರೋಹಿತ್‌ ಕುಪ್ಪಸಗೌಡರ್‌ನನ್ನು ಪೊಲೀಸರು ವಶಕ್ಕೆ ಪಡೆದಿದ್ದರು.

ಈ ಸಂಗತಿಯ ಕುರಿತು ನಿಮ್ಮ ಅನಿಸಿಕೆ ಏನು? ಕಾಮೆಂಟ್ ಮೂಲಕ ತಿಳಿಸಿ

Continue Reading

Latest

Mysore News in Kannada: ಬೆಂಗಳೂರು-ಮೈಸೂರು ಸಂಚಾರ ನಿಯಂತ್ರಣ ಜು.1ರಿಂದ ಸಂಪೂರ್ಣ ಹೈಟೆಕ್‌

Mysore News in Kannada: ಜುಲೈ 1ರಿಂದ ಮೈಸೂರು ಜಿಲ್ಲೆ ಮತ್ತು ನಗರ ಸೇರಿದಂತೆ ಇಡೀ ಬೆಂಗಳೂರು-ಮೈಸೂರು ರಸ್ತೆ ಸಂಚಾರವು ಸಂಪೂರ್ಣವಾಗಿ ಕ್ರಿಯಾತ್ಮಕ ಐಟಿಎಂಎಸ್ ಕಾರಿಡಾರ್ ಆಗಲಿದೆ. ಈ ವರ್ಷ ಬೆಂಗಳೂರಿನಿಂದ ಹತ್ತಿರದ ತಾಲೂಕುಗಳು ಮತ್ತು ಜಿಲ್ಲೆಗಳಿಗೆ ಸಂಪರ್ಕಿಸುವ ನಾಲ್ಕು ಪ್ರಮುಖ ಹೆದ್ದಾರಿಗಳಲ್ಲಿ (ತುಮಕೂರು ರಸ್ತೆ, ಕನಕಪುರ ರಸ್ತೆ, ಹೊಸೂರು ರಸ್ತೆ ಮತ್ತು ಹೊಸಕೋಟೆ) ಐಟಿಎಂಎಸ್ ಕ್ಯಾಮೆರಾಗಳನ್ನು ಅಳವಡಿಸುವುದಾಗಿ ಎಡಿಜಿಪಿ ಅಲೋಕ್ ಕುಮಾರ್ ತಿಳಿಸಿದ್ದಾರೆ.

VISTARANEWS.COM


on

ITMS Corridor
Koo

ಬೆಂಗಳೂರು : ಮೈಸೂರು ಜಿಲ್ಲೆ ಮತ್ತು ನಗರ (Mysore News in Kannada) ಸೇರಿದಂತೆ ಇಡೀ ಬೆಂಗಳೂರು-ಮೈಸೂರು ರಸ್ತೆ ಸಂಚಾರವು ಜುಲೈ 1ರಿಂದ ಸಂಪೂರ್ಣವಾಗಿ ಕ್ರಿಯಾತ್ಮಕ ಐಟಿಎಂಎಸ್ ಕಾರಿಡಾರ್ (ITMS Corridor) ಆಗಲಿದೆ ಎಂದು ಕರ್ನಾಟಕ ಸಂಚಾರ ಮತ್ತು ರಸ್ತೆ ಸುರಕ್ಷತೆಯ ಎಡಿಜಿಪಿ ಅಲೋಕ್ ಕುಮಾರ್ ತಿಳಿಸಿದ್ದಾರೆ.

ಐಟಿಎಂಎಸ್ ಅಥವಾ ಇಂಟಲಿಜೆಂಟ್ ಟ್ರಾಫಿಕ್ ಮ್ಯಾನೇಜ್‌ಮೆಂಟ್ ಸಿಸ್ಟಮ್ ಅನ್ನು ಡಿಸೆಂಬರ್ 2022ರಲ್ಲಿ ಬೆಂಗಳೂರಿನಲ್ಲಿ ಚಾಲನೆಗೆ ತರಲಾಯಿತು. ಅದಕ್ಕಾಗಿ 250 ಸ್ವಯಂಚಾಲಿತ ನಂಬರ್ ಪ್ಲೇಟ್ ರೆಕಗ್ನಿಷನ್(ಎಎನ್ ಪಿಆರ್) ಕ್ಯಾಮೆರಾಗಳು ಮತ್ತು 80 ರೆಡ್ ಲೈಟ್ ಉಲ್ಲಂಘನೆ ಪತ್ತೆ(ಆರ್ ಎಲ್ ವಿಡಿ)ಕ್ಯಾಮೆರಾಗಳನ್ನು ನಗರದ 50 ಜಂಕ್ಷನ್ ಗಳಲ್ಲಿ ಅಳವಡಿಸಲಾಗಿದೆ. ಈಗ ಐಟಿಎಂಎಸ್ ಅಡಿಯಲ್ಲಿ ಸ್ವಯಂಚಾಲಿತ ನಂಬರ್ ಪ್ಲೇಟ್ ರೆಕಗ್ನಿಷನ್ ಕ್ಯಾಮೆರಾಗಳನ್ನು ಮೈಸೂರಿನ ಪ್ರಮುಖ ರಸ್ತೆಗಳಲ್ಲಿ 8.5 ಕೋಟಿ ರೂ. ಅಂದರೆ ಮೈಸೂರು ನಗರಕ್ಕೆ ರೂ.4 ಕೋಟಿ ಮತ್ತು ಮೈಸೂರು ಜಿಲ್ಲೆಗೆ ರೂ.4.5 ಕೋಟಿ ಅಂದಾಜು ವೆಚ್ಚದಲ್ಲಿ ಅಳವಡಿಸಲಾಗಿದೆ. ಅಲ್ಲದೇ ಜುಲೈ 1ರಿಂದ ಟ್ರಾಫಿಕ್ ರೂಲ್ಸ್ ಬ್ರೇಕ್ ಮಾಡಿದ ವಾಹನ ಚಾಲಕರಿಗೆ ಚಲನ್ ನೀಡುವ ಪ್ರಕ್ರಿಯೆ ಆರಂಭವಾಗಲಿದೆ ಎಂದು ಅವರು ತಿಳಿಸಿದ್ದಾರೆ.

ಅಲ್ಲದೇ ಕ್ಯಾಮೆರಾಗಳನ್ನು ಮೈಸೂರು ಜಿಲ್ಲೆಯ ಹುಣಸೂರು, ಎಚ್ ಡಿ ಕೋಟೆ, ನಂಜನಗೂಡು ಮತ್ತು ಟಿ ನರಸೀಪುರದಂತಹ ಹಲವಾರು ಪ್ರದೇಶಗಳಲ್ಲಿ ಅಳವಡಿಸಲಾಗುವುದು. ಹಾಗಾಗಿ ರೂಲ್ಸ್ ಬ್ರೇಕ್ ಮಾಡಿದ ವಾಹನ ಚಾಲಕರಿಗೆ ಸರಿಯಾದ ಸಮಯಕ್ಕೆ ಎಸ್ ಎಂಎಸ್ ಕಳುಹಿಸಲಾಗುವುದು ಎಂದು ಅವರು ಹೇಳಿದ್ದಾರೆ.

ಹೆಚ್ಚುವರಿಯಾಗಿ ಈ ವರ್ಷ ಬೆಂಗಳೂರಿನಿಂದ ಹತ್ತಿರದ ತಾಲೂಕುಗಳು ಮತ್ತು ಜಿಲ್ಲೆಗಳಿಗೆ ಸಂಪರ್ಕಿಸುವ ನಾಲ್ಕು ಪ್ರಮುಖ ಹೆದ್ದಾರಿಗಳಲ್ಲಿ (ತುಮಕೂರು ರಸ್ತೆ, ಕನಕಪುರ ರಸ್ತೆ, ಹೊಸೂರು ರಸ್ತೆ ಮತ್ತು ಹೊಸಕೋಟೆ) ಐಟಿಎಂಎಸ್ ಕ್ಯಾಮೆರಾಗಳನ್ನು ಅಳವಡಿಸಲು ಎಡಿಜಿಪಿ ಪ್ರಸ್ತಾಪಿದ್ದಾರೆ ಎಂಬುದಾಗಿ ತಿಳಿದುಬಂದಿದೆ.

ಅಲ್ಲದೆ ಐಟಿಎಂಎಸ್ ಕ್ಯಾಮೆರಾಗಳ ಜೊತೆಗೆ ಅವರು ಈ ರಸ್ತೆಗಳಲ್ಲಿ ವೇರಿಯಬಲ್ ಮೆಸೇಜಿಂಗ್ ಚಿಹ್ನೆಗಳನ್ನು ಸೇರಿಸಲು ಯೋಜಿಸುತ್ತಿದ್ದಾರೆ ಎನ್ನಲಾಗಿದೆ. ಈ ಸೈನ್ ಬೋರ್ಡ್ ಗಳು ಸರಿಯಾದ ಸಮಯಕ್ಕೆ ಟ್ರಾಫಿಕ್ ಪರಿಸ್ಥಿತಿಯ ಕುರಿತು ಡಿಜಿಟಲ್ ಸಂದೇಶವನ್ನು ಪ್ರದರ್ಶಿಸುತ್ತದೆ. ಈ ಪ್ರಸ್ತಾವನೆಯನ್ನು ರಾಜ್ಯ ರಸ್ತೆ ಸಾರಿಗೆ ಪ್ರಾಧಿಕಾರವು ಅನುಮೋದಿಸಿದ್ದು, ಜುಲೈನಲ್ಲಿ ಟೆಂಡರ್ ಶುರುವಾಗಲಿದೆ. ಗದಗ ಪಟ್ಟಣದಲ್ಲಿಯೂ ಐಟಿಎಂಎಸ್ ಯೋಜನೆಯನ್ನು ಕೈಗೆತ್ತಿಕೊಳ್ಳಲಾಗಿದೆ. ಈ ಬಗ್ಗೆ ಜೂನ್ 1ರಂದು ರಾಜ್ಯ ಪೊಲೀಸ್ ನ ಸಂಚಾರ ಮತ್ತು ರಸ್ತೆ ಸುರಕ್ಷತಾ ವಿಭಾಗವು ಪ್ರಾದೇಶಿಕ ಎನ್ ಹೆಚ್ಎಐ ಅಧಿಕಾರಿಯೊಂದಿಗೆ ಸಭೆ ನಡೆಸಿತ್ತು. ಹಾಗೇ ಎಡಿಜಿಪಿ ಅವರು ಈ ಬಗ್ಗೆ ರಸ್ತೆ ಸಾರಿಗೆ ಮತ್ತು ಹೆದ್ದಾರಿ ಸಚಿವಾಲಯಕ್ಕೆ ಪತ್ರ ಬರೆಯುವ ಚಿಂತನೆ ಕೂಡ ನಡೆಸುತ್ತಿದ್ದಾರೆ ಎನ್ನಲಾಗಿದೆ.

ಇದನ್ನೂ ಓದಿ: Viral Video: ಮಕ್ಕಳನ್ನು ಖಾಸಗಿ ವಾಹನದಲ್ಲಿ ಶಾಲೆಗೆ ಕಳುಹಿಸುವ ಪೋಷಕರಲ್ಲಿ ಆತಂಕ ಮೂಡಿಸುವ ವಿಡಿಯೊ ಇದು!

ಹೆಚ್ಚಿನ ಸೈನ್ ಬೋರ್ಡ್ ಗಳು ಮತ್ತು ಬ್ಲಿಂಕರ್ ಗಳು, ಕ್ಯಾಮೆರಾಗಳ ಹೊರತಾಗಿಯೂ ಪೊಲೀಸರು ಹೆದ್ದಾರಿಗಳಿಗೆ ಸೈನ್ ಬೋರ್ಡ್ ಗಳು ಮತ್ತು ಬ್ಲಿಂಕರ್ ಗಳನ್ನು ಸಂಗ್ರಹಿಸಲು ಹಣ ಹಂಚಿಕೆ ಮಾಡುತ್ತಿದ್ದಾರೆ. ಕುಡಿದು ವಾಹನ ಚಾಲನೆ ಮಾಡುವವರನ್ನು ತಡೆಯಲು ಸುಮಾರು 800 ಆಲ್ಕೋಮೀಟರ್ ಗಳು ಮತ್ತು 155 ಲೇಸರ್ ಸ್ಪೀಡ್ ಗನ್ ಗಳನ್ನು ಬೆಂಗಳೂರು ಹೊರತುಪಡಿಸಿ ರಾಜ್ಯದಾದ್ಯಂತ ಪೊಲೀಸ್ ಸಿಬ್ಬಂದಿಗೆ ವಿತರಿಸುತ್ತಿದ್ದಾರೆ.

Continue Reading

ಕರ್ನಾಟಕ

DK Shivakumar: ವಾರದೊಳಗೆ ಹೊಸ ಜಾಹೀರಾತು ನೀತಿಯ ಕರಡು ಪ್ರತಿ ಬಿಡುಗಡೆ

DK Shivakumar: ಮುಂದಿನ ಒಂದು ವಾರದೊಳಗೆ ಜಾಹೀರಾತು ನೀತಿಯ ಕರಡು ಪ್ರತಿಯನ್ನು ಸಾರ್ವಜನಿಕ ಚರ್ಚೆಗೆ ಬಿಡುಗಡೆ ಮಾಡಲಾಗುವುದು. ಕರಡು ಪ್ರತಿಯ ಕುರಿತು ಆಕ್ಷೇಪಣೆಗಳನ್ನು ಸಲ್ಲಿಸಲು 15 ದಿನಗಳ ಕಾಲಾವಕಾಶ ನೀಡಲಾಗುವುದು ಎಂದು ಡಿಸಿಎಂ ಡಿ.ಕೆ.ಶಿವಕುಮಾರ್ ತಿಳಿಸಿದ್ದಾರೆ.

VISTARANEWS.COM


on

DCM D K Shivakumar statement about new advertising policy
Koo

ಬೆಂಗಳೂರು: ಮುಂದಿನ ಒಂದು ವಾರದೊಳಗೆ ಜಾಹೀರಾತು ನೀತಿಯ ಕರಡು ಪ್ರತಿಯನ್ನು ಸಾರ್ವಜನಿಕ ಚರ್ಚೆಗೆ ಬಿಡುಗಡೆ ಮಾಡಲಾಗುವುದು ಎಂದು ಡಿಸಿಎಂ ಡಿ.ಕೆ. ಶಿವಕುಮಾರ್ (DK Shivakumar) ತಿಳಿಸಿದ್ದಾರೆ.

ನಗರದ ಬಿಬಿಎಂಪಿ ಕಚೇರಿಯಲ್ಲಿ ನಡೆದ ಅಧಿಕಾರಿಗಳ ಸಭೆ ಬಳಿಕ ಮಾಧ್ಯಮ ಗೋಷ್ಠಿ ನಡೆಸಿ ಮಾತನಾಡಿದ ಅವರು, ಕರಡು ಪ್ರತಿಯ ಕುರಿತು ಆಕ್ಷೇಪಣೆಗಳನ್ನು ಸಲ್ಲಿಸಲು 15 ದಿನಗಳ ಕಾಲಾವಕಾಶ ನೀಡಲಾಗುವುದು. ಅನೇಕ ವರ್ಷಗಳಿಂದ ನ್ಯಾಯಾಲಯದಲ್ಲಿ ಪ್ರಕರಣಗಳು ಇದ್ದ ಕಾರಣಕ್ಕೆ ಕಳೆದ ಒಂದು ವರ್ಷದಿಂದ ಜಾಹೀರಾತು ನೀತಿ ಬಾಕಿ ಉಳಿದಿತ್ತು. ಪ್ರಸ್ತುತ ಸಂಘ, ಸಂಸ್ಥೆಗಳ ಜತೆ ಚರ್ಚೆ ನಡೆಸಲಾಗಿದೆ ಎಂದು ಹೇಳಿದರು.

ಇದನ್ನೂ ಓದಿ: Heat wave: ಉಷ್ಣ ಮಾರುತಕ್ಕೆ ತತ್ತರಿಸಿದ ಉತ್ತರ ಭಾರತ; ದೇಶಾದ್ಯಂತ 143 ಜನ ಬಲಿ

60 ಅಡಿಗಿಂತ ಹೆಚ್ಚು ಅಗಲ ಇರುವ ರಸ್ತೆಗಳಲ್ಲಿ ‘ಗ್ರೂಪ್ ಪ್ಯಾಕೇಜ್’ ತಯಾರಿಸಿ ಅವಕಾಶ ನೀಡಲಾಗುವುದು. ಸರ್ಕಾರಿ ಮತ್ತು ಖಾಸಗಿ ಕಟ್ಟಡಗಳ ಮೇಲೆ ಜಾಹಿರಾತು ನೀಡಲು ಅವಕಾಶ ನೀಡಲಾಗುವುದು. ಬಿಬಿಎಂಪಿ ಗೆ ತೆರಿಗೆ ನೀಡಿ ಖಾಸಗಿ ಕಟ್ಟಡಗಳು ಬಾಡಿಗೆ ನೀಡಬಹುದು. ಕಟ್ಟಡಗಳ ವಿಸ್ತೀರ್ಣ, ಎತ್ತರಕ್ಕೆ ತಕ್ಕಂತೆ ಯೂನಿಫಾರ್ಮಿಟಿ ತರಲಾಗುವುದು. ಮನಬಂದಂತೆ ಹಾಕಲು ಅವಕಾಶವಿಲ್ಲ. ಫಲಕಗಳನ್ನು ಮಾಡಲು ಯಾವ ಗುಣಮಟ್ಟದ ವಸ್ತು ಬಳಸಬೇಕು ಎಂದು ನಂತರ ತಿಳಿಸಲಾಗುವುದು. ಸರ್ಕಾರದಲ್ಲಿ ಇರುವ ಮೀಸಲಾತಿಗೆ ಅನುಗುಣವಾಗಿ ನೀಡಲಾಗುವುದು. ಪಿಪಿಪಿ ಮಾದರಿಯಲ್ಲಿ ಹಿಂದಿನ ಸರ್ಕಾರ ಒಂದಷ್ಟು ಅವಕಾಶ ನೀಡಿದ್ದು ಕಾನೂನು ಪ್ರಕಾರವಾಗಿ ಇದ್ದರೆ ರಕ್ಷಣೆ ಮಾಡಲಾಗುವುದು. ಏನೂ ಮಾಡದೆ ಇದ್ದವರನ್ನು ಕಾನೂನಿನ ಪ್ರಕಾರ ವಜಾ ಮಾಡಲಾಗುವುದು ಎಂದು ತಿಳಿಸಿದರು.

60 ಅಡಿಗಿಂತ ರಸ್ತೆ ಕಡಿಮೆ ಇದ್ದು, ಕಮರ್ಷಿಯಲ್ ವಲಯ ಎಂದು ಗುರುತಿಸಿದ್ದರೆ ಅಲ್ಲಿ ಜಾಹೀರಾತು ಅಳವಡಿಕೆಗೆ ಅವಕಾಶ ನೀಡಲಾಗುವುದು. ಜನಸಾಂದ್ರತೆ ಹಾಗು ವಹಿವಾಟು ಹೆಚ್ಚಿರುವ ಕಡೆ ಅವಕಾಶ ನೀಡಲಾಗುವುದು. ಸರ್ಕಾರಕ್ಕೆ ಹಣ ಬಾಕಿ ಉಳಿಸಿಕೊಂಡಿರುವ, ದಾವೆ ಹೂಡಿರುವವರಿಗೆ ಯಾವುದೇ ಕಾರಣಕ್ಕೂ ಅವಕಾಶ ಮಾಡಿಕೊಡುವುದಿಲ್ಲ. ನಾವು ಹೇಗೆ ಚುನಾವಣೆಗೆ ನಿಲ್ಲುವಾಗ ಯಾವುದೇ ಬಾಕಿಗಳನ್ನು ಉಳಿಸಿಕೊಳ್ಳದೆ ಇರುತ್ತೇವೆ, ಅದೇ ರೀತಿ ಇಲ್ಲಿ ಭಾಗವಹಿಸುವವರು ಎಲ್ಲಾ ಬಾಕಿಗಳನ್ನು ಕಟ್ಟಬೇಕು ಎಂದು ಹೇಳಿದರು.

ಇದನ್ನೂ ಓದಿ: Gold Rate Today: ಆಭರಣ ಕೊಳ್ಳುವವರಿಗೆ ಬಿಗ್‌ ರಿಲೀಫ್‌; ಇಳಿದ ಚಿನ್ನದ ದರ

ಒಂದಷ್ಟು ಪ್ರಕರಣಗಳು ನ್ಯಾಯಲಯದಲ್ಲಿವೆ ಎಂಬ ಪ್ರಶ್ನೆಗೆ ಉತ್ತರಿಸಿ, “ಆ ಪ್ರಕರಣಗಳಿಗೆ ನಾವು ಏನು ಮಾಡಲು ಆಗುವುದಿಲ್ಲ. ಅಲ್ಲಿ ತೀರ್ಮಾನವಾದ ನಂತರ ಬಗೆಹರಿಸಬಹುದು. ಜತೆಗೆ ನ್ಯಾಯಾಲಯವು ಒಂದಷ್ಟು ಸೂಚನೆಗಳನ್ನು ನೀಡಿತ್ತು ಅದನ್ನು ಗಣನೆಗೆ ತೆಗೆದುಕೊಂಡು ನಿಯಮಗಳನ್ನು ರೂಪಿಸಲಾಗಿದೆ. ಮೆಟ್ರೋ ಒಳಗೆ ಆ ನಿಗಮ ನೋಡಿಕೊಳ್ಳುತ್ತದೆ. ಹೊರಗಡೆ ಪಾಲಿಕೆ ಮತ್ತು ಮೆಟ್ರೋ ಸಹಭಾಗಿತ್ವದಲ್ಲಿ ಪ್ರತ್ಯೇಕ ಪ್ಯಾಕೇಜ್ ಘೋಷಣೆ ಮಾಡಲಾಗುವುದು ಎಂದು ಡಿಸಿಎಂ ಡಿ.ಕೆ. ಶಿವಕುಮಾರ್ ತಿಳಿಸಿದರು.

ಇದನ್ನೂ ಓದಿ: Thane Roof Collapse: ಟಿನ್ ರೂಫ್‌ ಬಿದ್ದು ಫುಟ್ಬಾಲ್​ ಆಡುತ್ತಿದ್ದ 9 ಮಕ್ಕಳಿಗೆ ಗಾಯ; 5 ಮಂದಿ ಗಂಭೀರ

ಸುಮಾರು 600 ಕೋಟಿ ಜಾಹೀರಾತು ಹಣ ಬಾಕಿ ಇದೆ ಇದಕ್ಕೆ ಪರಿಹಾರ ಏನು ಎನ್ನುವ ಪ್ರಶ್ನೆಗೆ ಉತ್ತರಿಸಿ, ಎಲ್ಲವನ್ನು ವಸೂಲಿ ಮಾಡಲಾಗುವುದು ಹಾಗೂ ಬಾಕಿ ಉಳಿಸಿಕೊಂಡವರು ಭಾಗವಹಿಸಲು ಅವಕಾಶ ನೀಡುವುದಿಲ್ಲ ಎಂದರು. ವಾರ್ಷಿಕ ಆದಾಯ ಎಷ್ಟು ನಿರೀಕ್ಷೆ ಮಾಡಲಾಗುತ್ತಿದೆ ಎಂಬ ಪ್ರಶ್ನೆಗೆ, ಇನ್ನು ಮಗುನೇ ಹುಟ್ಟಿಲ್ಲ, ಮೊದಲೇ ಬಟ್ಟೆಯನ್ನು ಏಕೆ ಹೊಲೆಸಲಿ ಎಂದು ಮರು ಪ್ರಶ್ನಿಸಿದರು.

Continue Reading
Advertisement
Swamji Murder
ಪ್ರಮುಖ ಸುದ್ದಿ5 mins ago

Swamji Murder : ಆಸ್ತಿ, ಅಧಿಕಾರಕ್ಕಾಗಿ ಗಲಾಟೆ; ಸ್ವಾಮೀಜಿಯೊಬ್ಬರನ್ನು ಕೊಲೆ ಮಾಡಿದ ಸ್ವಾಮೀಜಿಗಳ ಗುಂಪು

Child Death
ಬೆಳಗಾವಿ11 mins ago

Child Death : ಮಕ್ಕಳ ಮಾರಾಟ ಜಾಲದಲ್ಲಿ ರಕ್ಷಣೆಯಾಗಿದ್ದ ಮಗು ಮೃತ್ಯು; ಅಂತ್ಯ ಸಂಸ್ಕಾರ ನೆರವೇರಿಸಿದ ಪೊಲೀಸರು

Shobha Shetty car gift to yashwanth birthday
ಟಾಲಿವುಡ್28 mins ago

Shobha Shetty: ಭಾವಿ ಪತಿಗೆ ಕಾರ್ ಗಿಫ್ಟ್ ನೀಡಿದ ‘ಅಗ್ನಿಸಾಕ್ಷಿ’ ಖ್ಯಾತಿಯ ನಟಿ!

IND vs BAN
ಕ್ರೀಡೆ35 mins ago

IND vs BAN: ಕೊಹ್ಲಿ ಬ್ಯಾಟಿಂಗ್​ ಬಗ್ಗೆ ಸ್ವತಃ ಬೇಸರ ವ್ಯಕ್ತಪಡಿಸಿದ ಬ್ಯಾಟಿಂಗ್​ ಕೋಚ್​

Job Alert
ಉದ್ಯೋಗ42 mins ago

Job Alert: ಗುಡ್‌ನ್ಯೂಸ್‌; ರೈಲ್ವೆ ಇಲಾಖೆಯಲ್ಲಿ ಖಾಲಿ ಇದೆ ಬರೋಬ್ಬರಿ 18,799 ಹುದ್ದೆ: ಅಪ್ಲೈ ಮಾಡುವ ವಿಧಾನ ಇಲ್ಲಿದೆ

ITMS Corridor
Latest49 mins ago

Mysore News in Kannada: ಬೆಂಗಳೂರು-ಮೈಸೂರು ಸಂಚಾರ ನಿಯಂತ್ರಣ ಜು.1ರಿಂದ ಸಂಪೂರ್ಣ ಹೈಟೆಕ್‌

DCM D K Shivakumar statement about new advertising policy
ಕರ್ನಾಟಕ56 mins ago

DK Shivakumar: ವಾರದೊಳಗೆ ಹೊಸ ಜಾಹೀರಾತು ನೀತಿಯ ಕರಡು ಪ್ರತಿ ಬಿಡುಗಡೆ

2nd Puc Exam 3
ಶಿಕ್ಷಣ57 mins ago

2nd PUC Exam 3: ಸೋಮವಾರದಿಂದ ದ್ವಿತೀಯ ಪಿಯುಸಿ ಪರೀಕ್ಷೆ-3 ಶುರು; ವಿದ್ಯಾರ್ಥಿಗಳಿಗೆ ಬಸ್‌ ಪ್ರಯಾಣ ಉಚಿತ

Actor darshan Satish Reddy On Darshan Case
ರಾಜಕೀಯ57 mins ago

Actor Darshan: ನಾನು ದರ್ಶನ್ ಸೇಫ್ ಮಾಡ್ತಿರೋದು ಸುಳ್ಳು; ಬಿಜೆಪಿ ಶಾಸಕ ಸತೀಶ್ ರೆಡ್ಡಿ !

govt employees
ಕರ್ನಾಟಕ1 hour ago

Govt Employees: ಸರ್ಕಾರಿ ನೌಕರರಿಗೆ ಅಲರ್ಟ್‌; ಬೆಳಗ್ಗೆ 9.15ಕ್ಕೆ ಆಫೀಸ್‌ ತಲುಪದಿದ್ರೆ ಅರ್ಧ ದಿನ ರಜೆ!

Sharmitha Gowda in bikini
ಕಿರುತೆರೆ9 months ago

Geetha Serial Kannada: ನಿದ್ದೆ ಕದ್ದ ಚೋರಿ! ನಟಿ `ಭಾನುಮತಿ’ ಹಾಟ್‌ ಪೋಟೊಗಳಿಗೆ ಫ್ಯಾನ್ಸ್ ಫುಲ್ ಫಿದಾ

Kannada Serials
ಕಿರುತೆರೆ8 months ago

Kannada Serials TRP: 2ನೇ ಸ್ಥಾನದಲ್ಲಿ 2 ಧಾರಾವಾಹಿಗಳು; ಟಿಆರ್‌ಪಿ ರೇಸ್‌ನಲ್ಲಿಲ್ಲ ಭಾಗ್ಯಲಕ್ಷ್ಮೀ!

Bigg Boss- Saregamapa 20 average TRP
ಕಿರುತೆರೆ8 months ago

Kannada Serials TRP: ಏಳನೇ ಸ್ಥಾನಕ್ಕೆ ʻಅಮೃತಧಾರೆʼ ಕುಸಿತ; ಬಿಗ್‌ ಬಾಸ್‌-ಸರಿಗಮಪ ಟಿಆರ್‌ಪಿ ಎಷ್ಟು?

galipata neetu
ಕಿರುತೆರೆ7 months ago

Kanyadana Serial: ಕಿರುತೆರೆಗೆ ಮತ್ತೆ ಎಂಟ್ರಿ ಕೊಟ್ಟ ʻಗಾಳಿಪಟʼ ಖ್ಯಾತಿಯ ʻನೀತುʼ!

Kannada Serials
ಕಿರುತೆರೆ9 months ago

Kannada Serials TRP: ನಾಲ್ಕನೇ ಸ್ಥಾನಕ್ಕೆ ಕುಸಿತ ಕಂಡ ʻಸೀತಾ ರಾಮʼ; ಟಿಆರ್‌ಪಿ ರೇಸ್‌ಗೆ ʻಭಾಗ್ಯಲಕ್ಷ್ಮಿʼ ಬ್ಯಾಕ್‌!

Kannada Serials
ಕಿರುತೆರೆ9 months ago

Kannada Serials TRP: ಟಿಆರ್‌ಪಿಯಲ್ಲಿ ʻಭಾಗ್ಯಲಕ್ಷ್ಮೀʼ ಹವಾ; ʻಪುಟ್ಟಕ್ಕನ ಮಕ್ಕಳುʼ ಧಾರಾವಾಹಿಗೆ ಸಂಕಷ್ಟ!

Bigg Boss' dominates TRP; Sita Rama fell to the sixth position
ಕಿರುತೆರೆ8 months ago

Kannada Serials TRP: ಟಿಆರ್‌ಪಿಯಲ್ಲಿ ʻಬಿಗ್ ಬಾಸ್ʼದೇ ಮೇಲುಗೈ; 6ನೇ ಸ್ಥಾನಕ್ಕೆ ಕುಸಿದ ʻಸೀತಾ ರಾಮʼ

geetha serial Dhanush gowda engagement
ಕಿರುತೆರೆ6 months ago

Dhanush Gowda: ಗೀತಾ ಧಾರಾವಾಹಿ ನಟನ ನಿಶ್ಚಿತಾರ್ಥ; ಭವ್ಯಾಳ ಕಮೆಂಟ್‌ ಬಾಕ್ಸ್‌ ಆಫ್‌!

varun
ಕಿರುತೆರೆ7 months ago

Brindavana Serial: ʼಬೃಂದಾವನʼ ಧಾರಾವಾಹಿಯಲ್ಲಿ ದೊಡ್ಡ ಟ್ವಿಸ್ಟ್‌; ಪ್ರಮುಖ ಪಾತ್ರಧಾರಿಯೇ ಬದಲು

Kannada Serials
ಕಿರುತೆರೆ9 months ago

Kannada Serials TRP: ಟಿಆರ್‌ಪಿಯಲ್ಲಿ ಏರಿಕೆ ಕಂಡ ʻಅಮೃತಧಾರೆʼ; ʻಗಟ್ಟಿಮೇಳʼಕ್ಕೆ ನಾಲ್ಕನೇ ಸ್ಥಾನ!

karnataka weather Forecast
ಮಳೆ21 hours ago

Karnataka Weather : ರಭಸವಾಗಿ ಹರಿಯುವ ನೀರಲ್ಲಿ ಸಿಲುಕಿದ ಬೊಲೆರೋ; ಬಿರುಗಾಳಿ ಸಹಿತ ಮಳೆ ಎಚ್ಚರಿಕೆ

International Yoga Day 2024
ಕರ್ನಾಟಕ1 day ago

International Yoga Day 2024: ಎಲ್ಲೆಲ್ಲೂ ಯೋಗಾಯೋಗ‌ಕ್ಕೆ ಮಂಡಿಯೂರಿದ ಜನತೆ

Karnataka Weather Forecast
ಮಳೆ2 days ago

Karnataka Weather : ಬಾಗಲಕೋಟೆ, ಬೆಂಗಳೂರು ಸೇರಿ ಚಿಕ್ಕಮಗಳೂರಲ್ಲಿ ಸುರಿದ ಗಾಳಿ ಸಹಿತ ಮಳೆ

Actor Darshan
ಮೈಸೂರು5 days ago

Actor Darshan : ಕೊಲೆ ಕೇಸ್‌ ಬೆನ್ನಲ್ಲೇ ನಟ ದರ್ಶನ್‌ ಸೇರಿ ಪತ್ನಿ ವಿಜಯಲಕ್ಷ್ಮಿಗೆ ಬಾರ್ ಹೆಡೆಡ್ ಗೂಸ್ ಸಂಕಷ್ಟ!

Bakrid 2024
ಬೆಂಗಳೂರು5 days ago

Bakrid 2024 : ಮತ್ತೊಂದು ಧರ್ಮವನ್ನೂ ಪ್ರೀತಿಸಿ; ಬಕ್ರೀದ್‌ ಪ್ರಾರ್ಥನೆಯಲ್ಲಿ ಸಿಎಂ ಸಿದ್ದರಾಮಯ್ಯ ಕರೆ

Renukaswamy murder case The location of the accused is complete
ಸಿನಿಮಾ6 days ago

Renuka Swamy murder : ಭೀಕರವಾಗಿ ಕೊಂದರೂ ಆರೋಪಿಗಳಿಗೆ ಕಾಡುತ್ತಿಲ್ವಾ ಪಾಪಪ್ರಜ್ಞೆ? ನಗುತ್ತಲೇ ಹೊರಬಂದ ಪವಿತ್ರಾ ಗೌಡ, ಪವನ್‌

Renuka swamy murder
ಚಿತ್ರದುರ್ಗ6 days ago

Renuka swamy Murder : ರೇಣುಕಾಸ್ವಾಮಿ ಕುಟುಂಬಸ್ಥರಿಗೆ ಸಾಂತ್ವನ ಹೇಳಿದ ಬಾಳೆಹೊನ್ನೂರು ಶ್ರೀಗಳು

Vijayanagara News
ವಿಜಯನಗರ6 days ago

Vijayanagara News : ಕೆಲಸಕ್ಕೆ ಚಕ್ಕರ್, ಸಂಬಳಕ್ಕೆ ಹಾಜರ್! ಹಾರಕನಾಳು ಗ್ರಾಪಂ ಪಿಡಿಓಗಾಗಿ ಗ್ರಾಮಸ್ಥರ ಹುಡುಕಾಟ

Actor Darshan
ಯಾದಗಿರಿ1 week ago

Actor Darshan : ಬಾಸ್‌ ಅಂತ ಯಾಕ್‌ ಬಕೆಟ್‌ ಹಿಡಿಯುತ್ತೀರಾ ಅಂದವನಿಗೆ ದರ್ಶನ್ ಅಭಿಮಾನಿಯಿಂದ ಜೀವ ಬೆದರಿಕೆ!

Karnataka Weather Forecast
ಮಳೆ1 week ago

Karnataka Weather : ಕರಾವಳಿ, ಉತ್ತರ ಒಳನಾಡಿನಲ್ಲಿ ವರುಣಾರ್ಭಟ; ನಾಳೆಯು ಹಲವೆಡೆ ಸಿಕ್ಕಾಪಟ್ಟೆ ಮಳೆ

ಟ್ರೆಂಡಿಂಗ್‌