Congress Guarantee: ರಾಜ್ಯ ಬಿಜೆಪಿ ಅಧ್ಯಕ್ಷ ಮನೆಗೆ ಮಾರಿ ಪರರಿಗೆ ಉಪಕಾರಿ: ಸಚಿವ ದಿನೇಶ್‌ ಗುಂಡೂರಾವ್‌ ವಾಗ್ದಾಳಿ - Vistara News

ಕರ್ನಾಟಕ

Congress Guarantee: ರಾಜ್ಯ ಬಿಜೆಪಿ ಅಧ್ಯಕ್ಷ ಮನೆಗೆ ಮಾರಿ ಪರರಿಗೆ ಉಪಕಾರಿ: ಸಚಿವ ದಿನೇಶ್‌ ಗುಂಡೂರಾವ್‌ ವಾಗ್ದಾಳಿ

ಕೇಂದ್ರ ಎಲ್ಲವನ್ನೂ ಕರ್ನಾಟಕಕ್ಕೆ ಕೊಡಲಿ ಎಂಬ ಸ್ವಾರ್ಥ ನಮ್ಮಲಿಲ್ಲ. ಗೋದಾಮುಗಳಲ್ಲಿ ಅಕ್ಕಿಯನ್ನು ಕೊಳೆಯಿಸುವ ಬದಲು ಬಡವರಿಗೆ ಕೊಡಿ ಎಂದಿದ್ದೇವೆ ಎಂದು ದಿನೇಶ್‌ ಗುಂಡೂರಾವ್‌ ಹೇಳಿದ್ದಾರೆ.

VISTARANEWS.COM


on

Dinesh Gundurao Nalin Kumar Kateel
ಮಹತ್ವದ, ಕುತೂಹಲಕರ ಸುದ್ದಿಗಾಗಿ ಫಾಲೊ ಮಾಡಿ
Koo

ಬೆಂಗಳೂರು: ಕೆಂದ್ರ ಸರ್ಕಾರಕ್ಕೆ ಕರ್ನಾಟಕದ ಹಿತ ಮಾತ್ರವೇ ಮುಖ್ಯವಲ್ಲ ಎಂದು ರಾಜ್ಯ ಬಿಜೆಪಿ ಅಧ್ಯಕ್ಷ ನಳಿನ್‌ ಕುಮಾರ್‌ ಕಟೀಲ್‌ ಹೇಳಿರುವುದಕ್ಕೆ ಆರೋಗ್ಯ ಸಚಿವ ದಿನೇಶ್‌ ಗುಂಡೂರಾವ್‌ ಆಕ್ಷೇಪಿಸಿದ್ದಾರೆ.

ಅಕ್ಕಿ ಪೂರೈಕೆ ವಿಚಾರದಲ್ಲಿ ನಳಿನ್‌ ಕುಮಾರ್‌ ಕಟೀಲ್‌ ಹೇಳಿಕೆ ಕುರಿತು ಪ್ರತಿಕ್ರಿಯಿಸಿದ ದಿನೇಶ್‌ ಗುಂಡೂರಾವ್‌, ಕಟೀಲ್‌ ಅವರೇ, ನೀವು ಮನೆಗೆ ಮಾರಿ, ಪರರಿಗೆ ಉಪಕಾರಿ. ನಿಮ್ಮ ಈ ಮನೆಮುರಕುತನಕ್ಕೆ ಈಗಾಗಲೇ ಜನ ಪಾಠ ಕಲಿಸಿದ್ದಾರೆ‌. ಆದರೂ ನಿಮಗೆ ಬುದ್ದಿ ಬಂದಿಲ್ಲ.

ಕೇಂದ್ರ ಎಲ್ಲವನ್ನೂ ಕರ್ನಾಟಕಕ್ಕೆ ಕೊಡಲಿ ಎಂಬ ಸ್ವಾರ್ಥ ನಮ್ಮಲಿಲ್ಲ. ಗೋದಾಮುಗಳಲ್ಲಿ ಅಕ್ಕಿಯನ್ನು ಕೊಳೆಯಿಸುವ ಬದಲು ಬಡವರಿಗೆ ಕೊಡಿ ಎಂದಿದ್ದೇವೆ. ಅದೂ ಮಾರುಕಟ್ಟೆ ದರದಲ್ಲಿ, ಇದು ತಪ್ಪೆ? ಕಟೀಲ್‌ರವರೇ, ಕೇಂದ್ರದ ನಿಮ್ಮ BJP ಸರ್ಕಾರ ಕರ್ನಾಟಕಕ್ಕೆ ಮಾಡಿರುವ ಅನ್ಯಾಯ ಒಂದೇ ಎರಡೇ? GST ಬಾಕಿಯಲ್ಲಿ ಮೋಸ, GST ಪರಿಹಾರದಲ್ಲಿ ಮೋಸ, ನೆರೆ ಪರಿಹಾರದಲ್ಲಿ ಮೋಸ, ಬರ ಪರಿಹಾರದಲ್ಲೂ ಮೋಸ, ಯೋಜನೆ ಅನುಷ್ಠಾನದಲ್ಲೂ ಮೋಸ ಮಾಡಿದ್ದಾರೆ.ಕೇಂದ್ರ ಸರ್ಕಾರ ನಮ್ಮ ರಾಜ್ಯಕ್ಕೆ ಮಾಡಿರುವ ಮೋಸದ ಪಟ್ಟಿ ಹೇಳುತ್ತಾ ಹೋದರೆ ಪುಸ್ತಕವೇ ಬರೆಯಬಹುದು. ಹೌದಲ್ಲವೇ.?

ಇದನ್ನೂ ಓದಿ: Anna Bhagya: ಕೇಂದ್ರ ಸರ್ಕಾರ ಅಕ್ಕಿ ಕೋಡೋಲ್ಲ ಎಂದಿದೆ: ಗೋಯೆಲ್‌ ಭೇಟಿ ಬಳಿಕ ಹತಾಶೆಗೊಂಡ ಮುನಿಯಪ್ಪ

ಕಟೀಲ್‌ರವರೇ, ನೀವು ಈ ರಾಜ್ಯದ ಮನೆ ಮಗನಾಗಿ ಬಡವರ ಹೊಟ್ಟೆ ತುಂಬಿಸುವ ಅನ್ನಭಾಗ್ಯ ಯೋಜನೆಗೆ ಹೆಗಲು ಕೊಡಬೇಕು. ರಾಜ್ಯದ ಬಡವರಿಗೆ ಅಕ್ಕಿ ಕೊಡದೇ ದ್ವೇಷದ ರಾಜಕೀಯ ಮಾಡುತ್ತಿರುವುದು ಸರಿಯಲ್ಲ ಎಂದು ಕೇಂದ್ರ ನಾಯಕರಿಗೆ ತಿಳಿಹೇಳಬೇಕು. ಅದು ಬಿಟ್ಟು ಮೋದಿಯವರ ದ್ವೇಷದ ಬೆಂಕಿಗೆ ನೀವೆ ತುಪ್ಪ ಸುರಿದರೆ ಬಡವರ ಶಾಪ ನಿಮಗೆ ತಟ್ಟದಿರುತ್ತದೆಯೇ? ಎಂದು ಸರಣಿ ಟ್ವೀಟ್‌ ಮಾಡಿದ್ದಾರೆ.

ಕ್ಷಣ ಕ್ಷಣದ ಮಾಹಿತಿಗಾಗಿ Vistara News FaceBook ಪೇಜ್ ಫಾಲೋ ಮಾಡಿ
ಮಹತ್ವದ ಮಾಹಿತಿಗಾಗಿ ವಿಸ್ತಾರ ನ್ಯೂಸ್ ಆ್ಯಪ್ ಉಚಿತವಾಗಿ ಡೌನ್ ಲೋಡ್ ಮಾಡಿಕೊಳ್ಳಿ: Andriod App | IOS App
Continue Reading
Click to comment

Leave a Reply

Your email address will not be published. Required fields are marked *

ಕರ್ನಾಟಕ

NEET UG Result 2024 : ಮೊದಲ ರ‍್ಯಾಂಕ್‌ ಪಡೆದ 100 ವಿದ್ಯಾರ್ಥಿಗಳಲ್ಲಿ ಕರ್ನಾಟಕದ ಆರು ಮಂದಿ ನೀಟ್‌ ಟಾಪರ್ಸ್‌

NEET UG result 2024: ಜೂನ್‌ 4ರಂದು ನೀಟ್‌ ಯುಜಿ ಪರೀಕ್ಷೆ ಫಲಿತಾಂಶ ಪ್ರಕಟಗೊಂಡಿದೆ. ಮೊದಲ ರ‍್ಯಾಂಕ್‌ ಪಡೆದ 100 ವಿದ್ಯಾರ್ಥಿಗಳಲ್ಲಿ ಕರ್ನಾಟಕದ ಆರು ಮಂದಿ ನೀಟ್‌ ಟಾಪರ್ಸ್‌ ಆಗಿದ್ದಾರೆ.

VISTARANEWS.COM


on

By

NEET UG Result 2024
Koo

ಬೆಂಗಳೂರು/ನವದೆಹಲಿ: ಮೇ 5ರಂದು ನಡೆದಿದ್ದ ನೀಟ್‌ ಪರೀಕ್ಷೆಯ (NEET UG 2024) ಫಲಿತಾಂಶ ಜೂ.4ರಂದು ಪ್ರಕಟಗೊಂಡಿದೆ. ವೈದ್ಯಕೀಯ ಕೋರ್ಸ್‌ಗಳ ಪ್ರವೇಶಾತಿಗಾಗಿ ರಾಷ್ಟ್ರೀಯ ಪರೀಕ್ಷಾ ಸಂಸ್ಥೆ (ಎನ್‌ಟಿಎ) ನಡೆಸಿದ ರಾಷ್ಟ್ರೀಯ ಅರ್ಹತಾ ಮತ್ತು ಪ್ರವೇಶ ಪರೀಕ್ಷೆಯಲ್ಲಿ ಕರ್ನಾಟಕದ ಆರು ವಿದ್ಯಾರ್ಥಿಗಳು ಮೊದಲ ರ‍್ಯಾಂಕ್‌ ಪಡೆದಿದ್ದಾರೆ.

ದೇಶದಲ್ಲಿ ಮೊದಲ ರ‍್ಯಾಂಕ್‌ ಪಡೆದ ಟಾಪ್ 100 ವಿದ್ಯಾರ್ಥಿಗಳ ಪಟ್ಟಿಯಲ್ಲಿ 6 ವಿದ್ಯಾರ್ಥಿಗಳು ಮೊದಲ ಸ್ಥಾನವನ್ನು ಪಡೆದಿದ್ದಾರೆ. ಕರ್ನಾಟಕದ ವಿ.ಕಲ್ಯಾಣ್, ಶ್ಯಾಮ್ ಶ್ರೇಯಸ್ ಜೋಸೆಫ್‌, ಅರ್ಜುನ್ ಕಿಶೋರ್, ಪದ್ಮನಾಭ್ ಮೆನನ್, ಪ್ರಜ್ಞಾ ಪಿ.ಶೆಟ್ಟಿ, ಖುಷಿ ಮಗನೂರ್ ಎಂಬ ವಿದ್ಯಾರ್ಥಿಗಳು ಶೇ.99.98 ಅಂಕಗಳನ್ನು ಗಳಿಸುವ ಮೂಲಕ ಟಾಪರ್ ಸ್ಥಾನದಲ್ಲಿದ್ದಾರೆ.

NEET UG Result 2024 Out of the 100 students who secured the first rank six from Karnataka are NEET toppers
NEET UG Result 2024 Out of the 100 students who secured the first rank six from Karnataka are NEET toppers
NEET UG Result 2024 Out of the 100 students who secured the first rank six from Karnataka are NEET toppers

ಅಂದಹಾಗೇ, ದೇಶಾದ್ಯಂತ 571 ನಗರಗಳಲ್ಲಿ ಹಾಗೂ ಹೊರಗಿನ 14 ನಗರಗಳು ಸೇರಿದಂತೆ 4750 ವಿವಿಧ ಕೇಂದ್ರಗಳಲ್ಲಿ 05 ಮೇ 2024 ರಂದು ನೀಟ್‌ ಯುಜಿ ಪರೀಕ್ಷೆಯನ್ನು ನಡೆಸಲಾಗಿತ್ತು. ಪರೀಕ್ಷೆಯನ್ನು 13 ಭಾಷೆಗಳಲ್ಲಿ (ಅಸ್ಸಾಮಿ, ಬಂಗಾಳಿ, ಇಂಗ್ಲಿಷ್, ಗುಜರಾತಿ, ಹಿಂದಿ, ಕನ್ನಡ, ಮಲಯಾಳಂ, ಮರಾಠಿ, ಒಡಿಯಾ, ಪಂಜಾಬಿ, ತಮಿಳು, ತೆಲುಗು, ಮತ್ತು ಉರ್ದು) ನಡೆಸಲಾಗಿತ್ತು. ನೀಟ್‌ ಪರೀಕ್ಷೆಗೆ 24,06,079 ಅಭ್ಯರ್ಥಿಗಳ ನೋಂದಾಯಿಸಿಕೊಂಡಿದ್ದರು. ಅದರಲ್ಲಿ 23,33,297 ಪರೀಕ್ಷೆ ಹಾಜರಾಗಿದ್ದು, 72782 ಗೈರು ಹಾಜರಾಗಿದ್ದರು. ಇದರಲ್ಲಿ ಬಾಲಕರು 10,29,154 ಹಾಗೂ ಬಾಲಕಿಯರು 13,76,831, ತೃತೀಯ ಲಿಂಗಿಗಳು 18 ಮಂದಿ ಪರೀಕ್ಷೆಯನ್ನು ಬರೆದಿದ್ದರು.

ಇದನ್ನೂ ಓದಿ: NEET UG Results 2024: ನೀಟ್‌ ಫಲಿತಾಂಶ ಪ್ರಕಟ; ರಿಸಲ್ಟ್‌ ನೋಡಲು ಹೀಗೆ ಮಾಡಿ

ದೇಶದಾದ್ಯಂತ ವೈದ್ಯಕೀಯ ಕೋರ್ಸ್‌ಗಳ ಪ್ರವೇಶಾತಿಗಾಗಿ ನಡೆದಿದ್ದ ನೀಟ್ ಪರೀಕ್ಷೆಯ ಫಲಿತಾಂಶವು ಪ್ರಕಟಗೊಂಡಿದ್ದು, ಉತ್ತರ ಪತ್ರಿಕೆಗಳ ಮರುಪರಿಶೀಲನೆ ಅಥವಾ ಮರುಮೌಲ್ಯಮಾಪನಕ್ಕೆ ಅವಕಾಶವಿಲ್ಲ ಎನ್ನಲಾಗಿದೆ. ಇನ್ನೂ ನೀಟ್‌ ಪರೀಕ್ಷೆಯ ತಾತ್ಕಾಲಿಕ ಕೀ ಉತ್ತರಗಳನ್ನು ಮೇ 29 ರಂದು ಬಿಡುಗಡೆ ಮಾಡಲಾಗಿತ್ತು. ಇದಕ್ಕೆ ಆಕ್ಷೇಪಣೆ ಸಲ್ಲಿಸಿದ ಬಳಿಕ ಅಂತಿಮ ಕೀ ಉತ್ತರಗಳನ್ನು ಜೂನ್ 3 ರಂದು ಬಿಡುಗಡೆ ಮಾಡಲಾಗಿತ್ತು. ಈಗಾಗಲೇ ಬಿಡುಗಡೆಯಾಗಿರುವ ಅಂತಿಮ ಕೀ ಉತ್ತರಗಳ ಆಧಾರದ ಮೇಲೆ ನೀಟ್ ಯುಜಿ 2024ರ ಫಲಿತಾಂಶವನ್ನು ಪ್ರಕಟಿಸಲಾಗಿದೆ.

ಈ ಸಂಗತಿಯ ಕುರಿತು ನಿಮ್ಮ ಅನಿಸಿಕೆ ಏನು? ಕಾಮೆಂಟ್ ಮೂಲಕ ತಿಳಿಸಿ

Continue Reading

ಕರ್ನಾಟಕ

Mysore Election Result 2024: ಮೈಸೂರು-ಕೊಡಗು ಲೋಕಸಭಾ ಚುನಾವಣೆ; ಯಾವ ವಿಧಾನಸಭಾ ಕ್ಷೇತ್ರದಲ್ಲಿ ಯಾರಿಗೆ ಎಷ್ಟು ಮತ?

Mysore Election Result 2024: ಮೈಸೂರು-ಕೊಡಗು ಕ್ಷೇತ್ರದಲ್ಲಿ ಅಭ್ಯರ್ಥಿ ಬದಲಾದರೂ ಜನರ ಒಲವು ಬಿಜೆಪಿ ಕಡೆಗೇ ಇರುವುದು ಕಂಡುಬಂದಿದೆ. ವಿಧಾನಸಭಾ ಕ್ಷೇತ್ರವಾರು ಯಾವ ಅಭ್ಯರ್ಥಿಗೆ ಎಷ್ಟು ಮತಗಳು ಬಂದಿವೆ ಎಂಬ ಮಾಹಿತಿ ಇಲ್ಲಿದೆ.

VISTARANEWS.COM


on

Mysore election results 2024
Koo

ಮೈಸೂರು: ಮೈಸೂರು-ಕೊಡಗು ಲೋಕಸಭಾ ಕ್ಷೇತ್ರದಲ್ಲಿ (Mysore Election Result 2024) ಬಿಜೆಪಿಯ ಅಭ್ಯರ್ಥಿ ಯದುವೀರ್​ ಒಡೆಯರ್ (Yaduveer Wadiyar) ಅವರು 7,95,503 ಮತಗಳಿಂದ ಭರ್ಜರಿ ಗೆಲುವು ಸಾಧಿಸಿದ್ದಾರೆ. ಸಮೀಪದ ಪ್ರತಿಸ್ಪರ್ಧಿ ಕಾಂಗ್ರೆಸ್ ರಾಜ್ಯ ವಕ್ತಾರ ಲಕ್ಷ್ಮಣ್ ವಿರುದ್ಧ 1,39,262 ಮತಗಳ ಅಂತರದಿಂದ ಜಯಭೇರಿ ಭಾರಿಸಿದ್ದಾರೆ. ಇದರಿಂದ ಅಭ್ಯರ್ಥಿ ಬದಲಾದರೂ ಜನರ ಒಲವು ಬಿಜೆಪಿ ಕಡೆಗೇ ಇರುವುದು ಕಂಡುಬಂದಿದೆ. ಇನ್ನು ಇಲ್ಲಿನ ವಿಧಾನಸಭಾ ಕ್ಷೇತ್ರವಾರು ಯಾವ ಅಭ್ಯರ್ಥಿಗೆ ಎಷ್ಟು ಮತಗಳು ಬಂದಿವೆ ಎಂಬ ಮಾಹಿತಿ ಇಲ್ಲಿದೆ.

ಕ್ಷೇತ್ರದಲ್ಲಿ ಎರಡು ಬಾರಿಯ ಸಂಸದ ಪ್ರತಾಪ್‌ ಸಿಂಹ ಅವರಿಗೆ ಈ ಬಾರಿ ಬಿಜೆಪಿ ಟಿಕೆಟ್‌ ತಪ್ಪಿತ್ತು. ಅವರ ಬದಲಿಗೆ ರಾಜವಂಶಸ್ಥ ಯದುವೀರ್ ಕೃಷ್ಣದತ್ತ ಚಾಮರಾಜ ಒಡೆಯರ್ ಅಭ್ಯರ್ಥಿಯಾಗಿದ್ದರು. ಆದರೆ, ಅಭ್ಯರ್ಥಿ ಬದಲಾದರೂ ಕ್ಷೇತ್ರದಲ್ಲಿ ಬಿಜೆಪಿಗೇ ಅತಿ ಹೆಚ್ಚಿನ ಜನಬೆಂಬಲ ವ್ಯಕ್ತವಾಗಿದೆ.

ಲೋಕಸಭಾ ಕ್ಷೇತ್ರ ಚುನಾವಣೆ ಫಲಿತಾಂಶದ ವಿವರ

1) ಮಡಿಕೇರಿ ವಿಧಾನ ಸಭಾ ಕ್ಷೇತ್ರ
ಬಿಜೆಪಿ : 92949
ಕಾಂಗ್ರೆಸ್ : 56490
ಬಿಜೆಪಿ ಲೀಡ್: 36459

2) ವಿರಾಜಪೇಟೆ ವಿಧಾನ ಸಭಾ ಕ್ಷೇತ್ರ
ಬಿಜೆಪಿ : 87310
ಕಾಂಗ್ರೆಸ್ : 59932
ಬಿಜೆಪಿ ಲಿಡ್: 27378

3) ಪಿರಿಯಾಪಟ್ಟಣ ವಿಧಾನ ಸಭಾ ಕ್ಷೇತ್ರ
ಬಿಜೆಪಿ : 71237
ಕಾಂಗ್ರೆಸ್ : 82981
ಕಾಂಗ್ರೆಸ್ ಲೀಡ್: 11744

04) ಹುಣಸೂರು ವಿಧಾನ ಸಭಾ ಕ್ಷೇತ್ರ
ಬಿಜೆಪಿ : 84436
ಕಾಂಗ್ರೆಸ್ : 80340
ಕಾಂಗ್ರೆಸ್ ಲೀಡ್: 4096

5) ಚಾಮುಂಡೇಶ್ವರಿ ವಿಧಾನ ಸಭಾ ಕ್ಷೇತ್ರ
ಬಿಜೆಪಿ : 103112
ಕಾಂಗ್ರೆಸ್ :- 64968
ಬಿಜೆಪಿ ಲೀಡ್ 38144

6) ಕೃಷ್ಣರಾಜ ವಿಧಾನಸಭಾ ಕ್ಷೇತ್ರ
ಬಿಜೆಪಿ :-92449
ಕಾಂಗ್ರೆಸ್ :-45703
ಬಿಜೆಪಿ ಲೀಡ್ 46746

7) ಚಾಮರಾಜ ವಿಧಾನ ಸಭಾ ಕ್ಷೇತ್ರ
ಬಿಜೆಪಿ : 101166
ಕಾಂಗ್ರೆಸ್ : 47434
ಬಿಜೆಪಿ ಲೀಡ್: 53732

8) ನರಸಿಂಹರಾಜ ವಿಧಾನ ಸಭಾ ಕ್ಷೇತ್ರ
ಬಿಜೆಪಿ :- 40784
ಕಾಂಗ್ರೆಸ್ :-121739
ಕಾಂಗ್ರೆಸ್ ಲೀಡ್ 80955

ಈ ಬಾರಿ ಯದುವೀರ್ ಕೃಷ್ಣದತ್ತ ಚಾಮರಾಜ ಒಡೆಯರ್ ಅವರು ಕಾಂಗ್ರೆಸ್‌ ಅಭ್ಯರ್ಥಿ ಸುಮಾರು 1,39,262 ಮತಗಳ ಅಂತರದಿಂದ ಗೆಲುವು ಸಾಧಿಸಿದ್ದಾರೆ.

2019ರ ಸಾರ್ವತ್ರಿಕ ಚುನಾವಣೆಯಲ್ಲಿ ಬಿಜೆಪಿ ಪ್ರತಾಪ್ ಸಿಂಹ ಅವರು ಕಾಂಗ್ರೆಸ್​​ನ ಸಿ.ಎಚ್.ವಿಜಯಶಂಕರ್ ಅವರನ್ನು 1,38,647 ಮತಗಳ ಭಾರೀ ಅಂತರದಿಂದ ಸೋಲಿಸಿದ್ದರು. 2019ರ ಚುನಾವಣೆಯಲ್ಲಿ ಬಿಜೆಪಿ ಶೇ.52.27ರಷ್ಟು ಮತಗಳನ್ನು ಪಡೆದಿತ್ತು.

ಇದನ್ನೂ ಓದಿ: Mandya Election Result 2024 : ಮಂಡ್ಯದಲ್ಲಿ ಕುಮಾರ ಸ್ವಾಮಿಗೆ ಭರ್ಜರಿ ಗೆಲುವು

2014ರ ಸಾರ್ವತ್ರಿಕ ಚುನಾವಣೆಯಲ್ಲಿ ಪ್ರತಾಪ್ ಸಿಂಹ ಅವರು ಕಾಂಗ್ರೆಸ್​ನ ಅಡಗೂರು ಎಚ್.ವಿಶ್ವನಾಥ್ ಅವರನ್ನು 31,608 ಮತಗಳ ಭಾರೀ ಅಂತರದಿಂದ ಸೋಲಿಸಿದ್ದರು. ಈ ಕ್ಷೇತ್ರದಲ್ಲಿ ಬಿಜೆಪಿ ಶೇ.43.46ರಷ್ಟು ಮತಗಳನ್ನು ಗಳಿಸಿತ್ತು.

2009ರ ಸಾರ್ವತ್ರಿಕ ಚುನಾವಣೆಯಲ್ಲಿ ಅಡಗೂರು ಎಚ್.ವಿಶ್ವನಾಥ್ ಅವರು ಬಿಜೆಪಿಯ ಸಿ.ಎಚ್.ವಿಜಯಶಂಕರ್ ಅವರನ್ನು 7,691 ಮತಗಳ ಭಾರೀ ಅಂತರದಿಂದ ಸೋಲಿಸಿದ್ದರು. ಈ ಕ್ಷೇತ್ರದಲ್ಲಿ ಕಾಂಗ್ರೆಸ್ 36.42% ಮತಗಳನ್ನು ಪಡೆದಿತ್ತು.

Continue Reading

ಮಳೆ

Karnataka Weather : ಕಾರವಾರ, ಯಾದಗಿರಿಯಲ್ಲಿ ಅಬ್ಬರಿಸಿದ ವರುಣ; ಮುಂದಿನ 24 ಗಂಟೆಯಲ್ಲಿ ಗುಡುಗು ಸಹಿತ ಮಳೆ

Rain News : ಬೆಂಗಳೂರಲ್ಲಿ ವರುಣ ಬ್ರೇಕ್‌ ಕೊಟ್ಟಿದ್ದು, ಕರಾವಳಿಯಲ್ಲಿ ಅಬ್ಬರಿಸುತ್ತಿದ್ದಾನೆ. ಮುಂದಿನ 24 ಗಂಟೆಯಲ್ಲಿ ಹಲವೆಡೆ ಗುಡುಗು ಸಹಿತ ಭಾರಿ ಮಳೆಯಾಗಲಿದ್ದು, ಗಾಳಿ ವೇಗವು ಗಂಟೆಗೆ 30-40 ಕಿ.ಮೀ ವ್ಯಾಪ್ತಿಯಲ್ಲಿ (Karnataka Weather Forecast) ಬೀಸಲಿದೆ.

VISTARANEWS.COM


on

By

Karnataka weather Forecast
Koo

ಬೆಂಗಳೂರು: ಮಂಗಳವಾರದಂದು ಕರಾವಳಿಯಲ್ಲಿ ಗುಡುಗು ಸಹಿತ ಭಾರಿ (Karnataka Weather Forecast) ಮಳೆಯಾಗಿತ್ತು. ಅಂಕೋಲಾ, ಕುಮಟಾ, ಹೊನ್ನಾವರ, ಭಟ್ಕಳ ಭಾಗಗಳಲ್ಲಿ ಧಾರಾಕಾರ ಮಳೆಯಿಂದಾಗಿ (Rain News) ಜನಜೀವನ ಅಸ್ತವ್ಯಸ್ತವಾಗಿತ್ತು. ಭಾರಿ ಮಳೆಯಿಂದಾಗಿ (Heavy Rain Alert) ಹೆದ್ದಾರಿಯಲ್ಲಿ ನೀರು ನಿಂತಿತ್ತು. ಇದರಿಂದಾಗಿ ವಾಹನ ಸವಾರರು ಪರದಾಡಬೇಕಾಯಿತು.

ಸುಮಾರು ಒಂದು ಗಂಟೆಗೂ ಹೆಚ್ಚು ಸಮಯ ಎಡಬಿಡದೆ ಮಳೆ ಸುರಿದಿದೆ. ಕಳೆದೊಂದು ವಾರದಿಂದ ಘಟ್ಟದ ಮೇಲಿನ ತಾಲೂಕುಗಳಲ್ಲಿ ಮಳೆ ಸುರಿದಿತ್ತು. ಇದೀಗ ಕರಾವಳಿ ತಾಲೂಕುಗಳಲ್ಲಿ ವರುಣಾರ್ಭಟ ಆರಂಭವಾಗಿದೆ. ಲೋಕಸಭೆ ಚುನಾವಣೆಯ ಮತ ಎಣಿಕೆಗೂ ಮಳೆ ಅಡ್ಡಿ ಆಯಿತು. ಮತ ಎಣಿಕೆ ಕೇಂದ್ರಕ್ಕೆ ಅಧಿಕಾರಿ, ಸಿಬ್ಬಂದಿ ಮಳೆಯಲ್ಲಿ ನೆನೆದುಕೊಂಡೆ ಬರುವಂತಾಯಿತು.

karnataka weather Forecast

ಯಾದಗಿರಿಯಲ್ಲಿ ಸಿಡಿಲು ಬಡಿದು ನಿರ್ಮಾಣ ಹಂತದ ಮನೆ ಗೋಡೆ ಹಾನಿ

ಯಾದಗಿರಿಯಲ್ಲಿ ಮಂಗಳವಾರ ಬಿರುಗಾಳಿ ಸಹಿತ ಭಾರೀ ಮಳೆಯಾಗಿದೆ. ಸಿಡಿಲು ಬಡಿದು ನಿರ್ಮಾಣ ಹಂತದ ಮನೆ ಗೋಡೆಗೆ ಹಾನಿಯಾಗಿದೆ. ಯಾದಗಿರಿಯ ಸುರಪುರ ತಾಲೂಕಿನ ತಳ್ಳಳ್ಳಿ ಗ್ರಾಮದಲ್ಲಿ ಘಟನೆ ನಡೆದಿದೆ. ಮರಕ್ಕೆ ಸಿಡಿಲು ಬಡಿದು ಬೆಂಕಿಗಾಹುತಿಯಾಗಿದ್ದು, ಮರದ ಪಕ್ಕದಲ್ಲಿದ್ದ ಗುಡಿಸಲಿನಲ್ಲಿರುವ ಟಿವಿ ಸುಟ್ಟು ಹೋಗಿದೆ. ಗಿರಿನಗರದ ರಮೇಶ್ ಎಂಬುವವರ ಗುಡಿಸಲು ಹಾನಿಯಾಗಿದೆ. ಭಾರೀ ಮಳೆಗೆ ರೈಲ್ವೆ ನಿಲ್ದಾಣ ಸಮೀಪದ ಭವಾನಿ ಮಂದಿರದ ಮುಂಭಾಗದಲ್ಲಿ ಆಲದ ಮರ ಧರೆಗುರುಳಿದೆ.

ಬಿರುಗಾಳಿ ಸಹಿತ ಮಳೆಗೆ ಆಟೋ ಮೇಲೆ ಉರುಳಿ ಬಿದ್ದ ಮರ

ಬಸವಕಲ್ಯಾಣ: ಗುಡುಗು, ಮಿಂಚು, ಬಿರುಗಾಳಿಯೊಂದಿಗೆ ಸುರಿದ ಮಳೆಗೆ ನಿಂತಿದ್ದ ಆಟೋ ಮೇಲೆ ಮರ ಉರುಳಿ ಬಿದ್ದ ಘಟನೆ ನಗರದ ತ್ರಿಪುರಾಂತನಲ್ಲಿ ಜರುಗಿದೆ. ತ್ರಿಪುರಾಂತನ ಮಡಿವಾಳ ವೃತ್ತದಲ್ಲಿಯ ಮುಖ್ಯ ರಸ್ತೆ ಬದಿಯಲ್ಲಿ ನಿಲ್ಲಿಸಿದ ಆಟೋ ಮೇಲೆ ಬೃಹತ್ ಗಾತ್ರದ ಬೇವಿನ ಮರ ಉರುಳಿ ಬಿದ್ದು, ಆಟೋ ಜಖಂಗೊಂಡಿದೆ.
ನಗರದ ಹರಳಯ್ಯ ವೃತ್ತದ ಸಮೀಪದ ಕರ್ನಾಟಕ ಬ್ಯಾಂಕ್ ಮುಂಭಾಗದಲ್ಲಿ ಮುಖ್ಯ ರಸ್ತೆ ಮೇಲೆ ಮರ ಉರುಳಿ ಬಿದ್ದ ಪರಿಣಾಮ ಈ ಮಾರ್ಗದಲ್ಲಿ ಕೆಲ ಕಾಲ ರಸ್ತೆ ಸಂಚಾರ ಬದಲಾಯಿಸಲಾಗಿತ್ತು. ಸುದ್ದಿ ತಿಳಿದು ಸ್ಥಳಕ್ಕೆ ಧಾವಿಸಿದ ನಗರಸಭೆ ಅಧಿಕಾರಿಗಳು ತಕ್ಷಣ ಮರ ತೆರವುಗೊಳಿಸುವ ಮೂಲಕ ಸುಗಮ ಸಂಚಾರಕ್ಕೆ ಅನುವು ಮಾಡಿಕೊಟ್ಟರು.

ಇದನ್ನೂ ಓದಿ: Bellary VIMS Hospital : ಲೇಡಿ ಡಾಕ್ಟರ್‌ ಜುಟ್ಟು ಹಿಡಿದು ಎಳೆದಾಡಿ ಹೊಡೆದ; ವಿಮ್ಸ್‌ ಆಸ್ಪತ್ರೆಯಲ್ಲಿ ದಿಢೀರ್‌ ಪ್ರತಿಭಟನೆ

ಜೂನ್‌ 5ಕ್ಕೂ ಹಲವೆಡೆ ಮಳೆ ಅಬ್ಬರ

ಜೂ 5ರಂದು ಉತ್ತರ ಕನ್ನಡ ಜಿಲ್ಲೆಯ ಒಂದೆರಡು ಕಡೆಗಳಲ್ಲಿ ಗುಡುಗು ಸಹಿತ ಭಾರಿ ಮಳೆಯಾಗುವ ಸಾಧ್ಯತೆಯಿದೆ. ಜತೆಗೆ ಬಾಗಲಕೋಟೆ, ಗದಗ, ಕೊಪ್ಪಳ, ರಾಯಚೂರು, ವಿಜಯಪುರ, ಬಳ್ಳಾರಿ, ಚಿಕ್ಕಮಗಳೂರು ಸೇರಿ ಚಿತ್ರದುರ್ಗ, ದಾವಣಗೆರೆ ಜಿಲ್ಲೆಗಳ ಒಂದೆರಡು ಕಡೆಗಳಲ್ಲಿ ಗುಡುಗು ಸಹಿತ ಭಾರಿ ಮಳೆಯಾಗಲಿದೆ. ಗಾಳಿಯ ವೇಗವು 30-40 ಕಿಮೀ ಇರಲಿದೆ.

ದಕ್ಷಿಣ ಕನ್ನಡ, ಉಡುಪಿ, ಬೆಳಗಾವಿ, ಬೀದರ್, ಧಾರವಾಡ, ಹಾವೇರಿ, ಕಲಬುಲಗಿ, ಯಾದಗಿರಿ, ಬೆಂಗಳೂರು ಗ್ರಾಮಾಂತರ, ಬೆಂಗಳೂರು ನಗರ, ಚಾಮರಾಜನಗರ, ಚಿಕ್ಕಬಳ್ಳಾಪುರ, ಹಾಸನ, ಕೊಡಗು, ಕೋಲಾರ, ಮಂಡ್ದ, ಮೈಸೂರು, ರಾಮನಗರ, ಶಿವಮೊಗ್ಗ, ತುಮಕೂರು, ವಿಜಯನಗರ ಜಿಲ್ಲೆಗಳ ಹೆಚ್ಚಿನ ಸ್ಥಳಗಳಲ್ಲಿ ಗುಡುಗು ಸಹಿತ ಸಾಧಾರಣ ಮಳೆಯಾಗುವ ಸಾಧ್ಯತೆಯಿದೆ.

ಈ ಸಂಗತಿಯ ಕುರಿತು ನಿಮ್ಮ ಅನಿಸಿಕೆ ಏನು? ಕಾಮೆಂಟ್ ಮೂಲಕ ತಿಳಿಸಿ

Continue Reading

ಕರ್ನಾಟಕ

Karnataka Election Results 2024: ಮೋದಿ ಜನಪ್ರಿಯತೆ ಕಡಿಮೆ ಆಗಿದೆ, ಕಾಂಗ್ರೆಸ್‌ ವೋಟ್‌ ಶೇರ್ ಹೆಚ್ಚಾಗಿದೆ: ಸಿಎಂ ಸಿದ್ದರಾಮಯ್ಯ

Karnataka Election Results 2024: ಬಿಜೆಪಿ ವೋಟಿಂಗ್ ಶೇರ್ ಶೇ. 5 ರಷ್ಟು ಕಡಿಮೆ ‌ಆಗಿದೆ, ಆದರೆ, ವೋಟಿಂಗ್‌ ಶೇರ್ ಜಾಸ್ತಿ ಆಗಿದ್ದರೂ ರಾಜ್ಯದಲ್ಲಿ ಕಾಂಗ್ರೆಸ್‌ಗೆ ಹೆಚ್ಚು ಸೀಟ್‌ ಬಂದಿಲ್ಲ. ಇದರಿಂದ ಎಲ್ಲೂ ಮೋದಿ ಅಲೆ ಇರಲಿಲ್ಲ ಎಂಬುವುದು ತಿಳಿಯುತ್ತದೆ ಎಂದು ಸಿಎಂ ಸಿದ್ದರಾಮಯ್ಯ ತಿಳಿಸಿದ್ದಾರೆ.

VISTARANEWS.COM


on

Karnataka Election Results 2024
Koo

ಬೆಂಗಳೂರು: ರಾಜ್ಯದಲ್ಲಿ ನಾವು 15 ರಿಂದ 20 ಕಡೆ ಗೆಲ್ಲುತ್ತೇವೆ ಎಂದುಕೊಂಡಿದ್ದೆವು. ಆದರೆ ನಮ್ಮ ನಿರೀಕ್ಷೆಯಂತೆ ಫಲಿತಾಂಶ (Karnataka Election Results 2024) ಬರಲಿಲ್ಲ. ಈ ಬಾರಿ ರಾಜ್ಯದಲ್ಲಿ 9 ಕಡೆ ಗೆಲುವು ಸಿಕ್ಕಿದೆ. ಕಳೆದ ಬಾರಿ ಕಾಂಗ್ರೆಸ್‌ ಒಂದು ಸೀಟ್‌ ಮಾತ್ರ ಗೆದ್ದಿತ್ತು. ಈ ಬಾರಿ 2019ಕ್ಕಿಂತ ನಮ್ಮ ಓಟಿಂಗ್ ಶೇರ್ ಜಾಸ್ತಿ ಆಗಿದೆ ಎಂದು ಸಿಎಂ ಸಿದ್ದರಾಮಯ್ಯ ತಿಳಿಸಿದರು.

ನಗರದಲ್ಲಿ ಮಂಗಳವಾರ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಬಿಜೆಪಿ ವೋಟಿಂಗ್ ಶೇರ್ ಶೇ. 5 ರಷ್ಟು ಕಡಿಮೆ ‌ಆಗಿದೆ, ಆದರೆ, ಓಟಿಂಗ್‌ ಶೇರ್ ಜಾಸ್ತಿ ಆಗಿದ್ದರೂ ರಾಜ್ಯದಲ್ಲಿ ಕಾಂಗ್ರೆಸ್‌ಗೆ ಹೆಚ್ಚು ಸೀಟ್‌ ಬಂದಿಲ್ಲ. ದೇಶದಲ್ಲಿ ಕಾಂಗ್ರೆಸ್‌ಗೆ ಶೇ. 3 ರಷ್ಟು ಓಟಿಂಗ್ ಜಾಸ್ತಿ ಆಗಿದೆ. ಬಿಜೆಪಿ 2019ರಲ್ಲಿ 303 ಗೆದ್ದಿತ್ತು. ಈಗ, 246 ಗೆದ್ದಿದೆ. ಬಿಜೆಪಿ ಅತಿ ದೊಡ್ಡ ಪಾರ್ಟಿ ಆಗಿ ಬಂದಿದೆ. ಆದರೆ, ಎಲ್ಲೂ ಮೋದಿ ಅಲೆ ಇರಲಿಲ್ಲ. ಮೋದಿಯವರ ಜನಪ್ರಿಯತೆ ಕಡಿಮೆ ಆಗಿದೆ ಎಂದು ಸಿಎಂ ಹೇಳಿದರು.

ಯಾರು ಸರ್ಕಾರ ರಚಿಸುತ್ತಾರೋ ಗೊತ್ತಿಲ್ಲ

ಯಾರು ಸರ್ಕಾರ ರಚಿಸುತ್ತಾರೋ ಅಂತ ನನಗೆ ಗೊತ್ತಿಲ್ಲ ಆದರೆ ಬಿಜೆಪಿಗೆ ಮೆಜಾರಿಟಿ ಸೀಟ್ ಅಂತೂ ಬಂದಿಲ್ಲ.
ಮೋದಿ ಸೋಲುತ್ತೇವೆ ಅಂತ ಗೊತ್ತಾಗಿ ಧರ್ಮದ ಆಧಾರದ ಮೇಲೆ ಮತ ಕೇಳಲು ಶುರು ಮಾಡಿದರು. ಕೋಮುವಾದದ ಮೇಲೆ ಮತ ಕೇಳಿದ್ದು ವರ್ಕ್‌ಔಟ್‌ ಆಗಿಲ್ಲ, ಎನ್‌ಡಿಎಗೆ 60 ಸ್ಥಾನ ಕಡಿಮೆ ಆಗಿವೆ

ನರೇಂದ್ರ ಮೋದಿ ಪ್ರಧಾನಿ ಆಗಲು ನೈತಿಕ ಹಕ್ಕಿಲ್ಲ. ಇ.ಡಿ. ದುರ್ಬಳಕೆ ಮಾಡಿಕೊಂಡು ದೆಹಲಿ ಮುಖ್ಯಮಂತ್ರಿಯನ್ನು ಜೈಲಿಗೆ ಕಳುಹಿಸಲಾಯಿತು. ಅಯೋಧ್ಯೆಯಲ್ಲಿ ಬಿಜೆಪಿ ಸೋತಿದೆ, ಅಲ್ಲಿ ಎಸ್‌ಪಿ ಅಭ್ಯರ್ಥಿ ಗೆಲುವು ಸಾಧಿಸಿದ್ದಾರೆ. ಒಟ್ಟಾರೆ ಬಿಜೆಪಿಗೆ ದೊಡ್ಡ ಹಿನ್ನಡೆ ಆಗಿದೆ.

ರಾಹುಲ್ ಗಾಂಧಿ ಅವರ ನಾಯಕತ್ವಕ್ಕೆ ದೇಶದಲ್ಲಿ ಬೆಂಬಲ ಸಿಕ್ಕಿದೆ. ರಾಹುಲ್ ಗಾಂಧಿಯವರು ಮಾಡಿದ ಯಾತ್ರೆಯಿಂದ ಇಂಡಿ ಮೈತ್ರಿ ಕೂಟಕ್ಕೆ ಬೆಂಬಲ ಸಿಕ್ಕಿದೆ. ರಾಹುಲ್ ಗಾಂಧಿಯವರು ಎರಡೂ ಕಡೆ ಗೆಲುವು ಸಾಧಿಸಿದ್ದಾರೆ, ಹೀಗಾಗಿ ಅವರಿಗೆ ನಾನು ವೈಯಕ್ತಿಕವಾಗಿ ಅಭಿನಂದನೆ ತಿಳಿಸುವೆ. ಪ್ರಜಾಪ್ರಭುತ್ವ ಮತ್ತು ಸಂವಿಧಾನ ಉಳಿಸಿಕೊಳ್ಳಲು ಜನರು ಮತದಾನ ಮಾಡಿದ್ದಾರೆ. ನಮಗೆ ಗೆಲುವು ಆಗಿಲ್ಲ ನಿಜ, ಆದರೆ ಶೇಕಡಾವಾರು ಮತ ಪ್ರಮಾಣ ಜಾಸ್ತಿ ಆಗಿದೆ ಎಂದು ತಿಳಿಸಿದರು.

ಹಳೆ ಮೈಸೂರು ಹಿನ್ನಡೆಗೆ ಕಾರಣ ತಿಳಿಸಿದ ಸಿಎಂ, ಎರಡು ಪಾರ್ಟಿ ಒಂದಾಗಿ ಚುನಾವಣೆ ಮಾಡಿದರು. ಹೀಗಾಗಿ ನಮ್ಮ ನಿರೀಕ್ಷೆಯಂತೆ ಗೆಲುವು ಸಾಧಿಸಿಲ್ಲ. ನಾವು ಗೆದ್ದೇ ಬಿಟ್ಟಿದ್ದೀವಿ ಅಂತ ಹೇಳಿಲ್ಲ. ನಾವು ಗೆದ್ದಿಲ್ಲ ಎಂದು ಒಪ್ಪಿಕೊಂಡಿದ್ದೇವೆ. ಪ್ರಧಾನಿಯಾಗಿದ್ದವರು ಯಾರು ಯಾರ ಹೆಸರಲ್ಲಿ ಓಟು ಕೇಳಿದರು ಎಂದು ಪ್ರಶ್ನಿಸಿದರು.

ಗ್ಯಾರಂಟಿ ವರ್ಕೌಟ್ ಆಗಿದ್ಯಾ ಎಂಬ ವಿಚಾರಕ್ಕೆ ಪ್ರತಿಕ್ರಿಯಿಸಿದ ಅವರು, ಗ್ಯಾರಂಟಿ ವರ್ಕ್ ಆಗಿದೆಯೋ, ಇಲ್ಲವೋ ಎನ್ನುವುದನ್ನು ವಿಶ್ಲೇಷಣೆ ಮಾಡಬೇಕು. ಮೇಲ್ನೋಟಕ್ಕೆ ವರ್ಕೌಟ್ ಆಗಿದೆ ಎಂಬುವುದು ತಿಳಿಯುತ್ತದೆ ಎಂದು ಹೇಳಿದರು.

ಮತದಾನ ಮತ್ತು ಎಣಿಕೆ ಸಮಯದಲ್ಲಿ ಯಾವುದೇ ಅಹಿತಕರ ಘಟನೆಗಳು ನಡೆದಿಲ್ಲ. ಈ ಹಿನ್ನೆಲೆಯಲ್ಲಿ ಮೊದಲಿಗೆ ಕರ್ನಾಟಕ ಮತ್ತು ದೇಶದ ಮತದಾರರಿಗೆ ಧನ್ಯವಾದ ಹೇಳಲು ಬಯಸುವೆ. ಹಾಗೆಯೇ ರಾಜ್ಯದಿಂದ ಗೆದ್ದ ಎಲ್ಲಾ ಅಭ್ಯರ್ಥಿಗಳಿಗೆ ಅಭಿನಂದನೆಗಳು ತಿಳಿಸುವೆ ಎಂದು ಹೇಳಿದರು.

ರಾಹುಲ್ ಗಾಂಧಿಯನ್ನು ದೇಶ ಒಪ್ಪಿಕೊಂಡಿದೆ

ರಾಹುಲ್ ಗಾಂಧಿಯವರ ಎರಡು ಯಾತ್ರೆಗಳು ಫಲ ನೀಡಿವೆ. ಕಾಂಗ್ರೆಸ್ ಮತ್ತು ರಾಹುಲ್ ಗಾಂಧಿಯವರನ್ನು ದೇಶದ ಜನತೆ ಬಹಳ ದೊಡ್ಡ ಮಟ್ಟದಲ್ಲಿ ಒಪ್ಪಿಕೊಂಡಿದ್ದಾರೆ. ಎರಡೂ ಕ್ಷೇತ್ರಗಳಲ್ಲೂ ರಾಹುಲ್ ಗಾಂಧಿ ಭರ್ಜರಿ ಮತಗಳಿಂದ ಗೆದ್ದಿದ್ದಾರೆ. ಅವರಿಗೆ ಅಭಿನಂದಿಸುತ್ತೇನೆ ಎಂದರು.

ಕೈಯಲ್ಲಿ ಸಂವಿಧಾನ ಹಿಡಿದೇ ರಾಹುಲ್ ಗಾಂಧಿಯವರು ಇಡೀ ದೇಶದಲ್ಲಿ ಚುನಾವಣಾ ಪ್ರಚಾರ ಮಾಡಿದರು. ದೇಶದ ಜನ ಸಂವಿಧಾನದ ಉಳಿವಿಗೆ, ಪ್ರಜಾಪ್ರಭುತ್ವ ಉಳಿವಿಗಾಗಿ ರಾಹುಲ್ ಗಾಂಧಿಯವರ ಕೈ ಹಿಡಿದಿದ್ದಾರೆ ಎಂದರು.

ಮೋದಿಯವರು ಚುನಾವಣೆಯ ಕೊನೆ ಕೊನೆಗೆ ಧರ್ಮ, ದೇವರ ಹೆಸರಲ್ಲಿ ಮತ ಕೇಳಿ ನೇರವಾಗಿ ಇತರೆ ಧರ್ಮೀಯರ ವಿರುದ್ಧ ಭಾಷಣ ಮಾಡಿದರು, ಹಿಂದುಳಿದವರ ಮೀಸಲಾತಿ ಕಾಂಗ್ರೆಸ್ ಕಿತ್ತುಕೊಳ್ಳುತ್ತದೆ ಎಂದು ಸುಳ್ಳು ಹೇಳಿಕೊಂಡು ತಿರುಗಿದರೂ ಮೋದಿಯವರಿಗೆ ಬಹುಮತ ಬರಲಿಲ್ಲ. ರಾಮನ ಹೆಸರಲ್ಲಿ, ರಾಮ ಮಂದಿರದ ಹೆಸರಲ್ಲಿ ಅಯೋಧ್ಯೆಯಲ್ಲೂ ಬಿಜೆಪಿ ಸೋತಿದೆ. ಇದು ಬಿಜೆಪಿಯ ಸೋಲು ಎಂದರು.

ಇದನ್ನೂ ಓದಿ | Odisha Assembly Result 2024: ಬಿಜೆಡಿ ಭದ್ರ ಕೋಟೆಗೆ ಬಿಜೆಪಿ ಗ್ರ್ಯಾಂಡ್‌ ಎಂಟ್ರಿ! ಹಳೇ ದೋಸ್ತಿಗೆ ಸಕತ್‌ ಠಕ್ಕರ್‌ ಕೊಟ್ಟ ಕೇಸರಿ ಬಣ

ಬಿಜೆಪಿ ಜನಪ್ರಿಯತೆ ಕುಸಿದಿದೆ

ಇಡೀ ದೇಶದಲ್ಲಿ ರಾಜ್ಯದಲ್ಲಿ 2019ಕ್ಕಿಂತ ಬಿಜೆಪಿ ಪ್ರಭಾವ ವಿಪರೀತ ಕುಸಿದಿದೆ ಎಂದು ಸಿಎಂ ವಿವರಿಸಿದರು. ಕೇಂದ್ರದಲ್ಲಿ ಯಾರು ಸರ್ಕಾರ ರಚಿಸುತ್ತಾರೆ ಎನ್ನುವುದು ಅನಿಶ್ಚಿತವಾಗಿದೆ ಎಂದರು.

ಸುದ್ದಿಗೋಷ್ಠಿಯಲ್ಲಿ ಸಚಿವ ಎಂ.ಸಿ. ಸುಧಾಕರ್, ಎಂಎಲ್‌ಸಿ ಸಲೀಂ ಅಹ್ಮದ್, ಗೋವಿಂದರಾಜು ಉಪಸ್ಥಿತರಿದ್ದರು.

Continue Reading
Advertisement
Election Results 2024
Lok Sabha Election 202412 mins ago

Election Results 2024: ತ.ನಾಡಿನಲ್ಲಿ ಪೈಪೋಟಿ ನೀಡಿ ಸೋತ ಅಣ್ಣಾಮಲೈ; ಬಿಜೆಪಿ ಮತ ಪ್ರಮಾಣ ಶೇ. 3.57ರಿಂದ 11.04ಕ್ಕೆ ಜಿಗಿತ!

Narendra Modi Election
ದೇಶ19 mins ago

Narendra Modi Election: 3ನೇ ಅವಧಿಯಲ್ಲಿ ಹೊಸ ಅಧ್ಯಾಯ ಸೃಷ್ಟಿ; ಫಲಿತಾಂಶದ ಬೆನ್ನಲ್ಲೇ ಮೋದಿ ವಿಶ್ವಾಸ

Hanuma Vihari
ಕ್ರಿಕೆಟ್41 mins ago

Hanuma Vihari: 2 ತಿಂಗಳ ಬಳಿಕ ನಿರಾಕ್ಷೇಪಣಾ ಪತ್ರ ಪಡೆದ ಹನುಮ ವಿಹಾರಿ

NEET UG Result 2024
ಕರ್ನಾಟಕ1 hour ago

NEET UG Result 2024 : ಮೊದಲ ರ‍್ಯಾಂಕ್‌ ಪಡೆದ 100 ವಿದ್ಯಾರ್ಥಿಗಳಲ್ಲಿ ಕರ್ನಾಟಕದ ಆರು ಮಂದಿ ನೀಟ್‌ ಟಾಪರ್ಸ್‌

Mysore election results 2024
ಕರ್ನಾಟಕ1 hour ago

Mysore Election Result 2024: ಮೈಸೂರು-ಕೊಡಗು ಲೋಕಸಭಾ ಚುನಾವಣೆ; ಯಾವ ವಿಧಾನಸಭಾ ಕ್ಷೇತ್ರದಲ್ಲಿ ಯಾರಿಗೆ ಎಷ್ಟು ಮತ?

Election Results 2024
Lok Sabha Election 20241 hour ago

Election Results 2024: ಶಶಿ ತರೂರ್‌ ವಿರುದ್ಧ ವೀರೋಚಿತ ಸೋಲು ಕಂಡ ಬಿಜೆಪಿಯ ರಾಜೀವ್‌ ಚಂದ್ರಶೇಖರ್‌

Election Results 2024
ಕ್ರಿಕೆಟ್1 hour ago

Election Results 2024: ಪಶ್ಚಿಮ ಬಂಗಾಳದಲ್ಲಿ ಮಾಜಿ ಕ್ರಿಕೆಟಿಗ ಕೀರ್ತಿ ಆಜಾದ್​ಗೂ ಜಯಭೇರಿ

Election Results 2024
ದೇಶ1 hour ago

Election results 2024: ʼಎಲ್ಲಾ ಪಕ್ಷಗಳೂ ಹ್ಯಾಪಿ ಆಗಿವೆ..ಕಾರಣ ಇಲ್ಲಿದೆ ನೋಡಿʼ- ಫನ್ನಿ ಮೀಮ್ಸ್‌ಗೆ ನೆಟ್ಟಿಗರು ಫಿದಾ!

Narendra Modi Election Live
ದೇಶ1 hour ago

Narendra Modi Election Live: ಚುನಾವಣೆ ಫಲಿತಾಂಶದ ಹಿನ್ನೆಲೆಯಲ್ಲಿ ಮೋದಿ ಭಾಷಣ; ಲೈವ್‌ ಇಲ್ಲಿ ವೀಕ್ಷಿಸಿ

Karnataka weather Forecast
ಮಳೆ2 hours ago

Karnataka Weather : ಕಾರವಾರ, ಯಾದಗಿರಿಯಲ್ಲಿ ಅಬ್ಬರಿಸಿದ ವರುಣ; ಮುಂದಿನ 24 ಗಂಟೆಯಲ್ಲಿ ಗುಡುಗು ಸಹಿತ ಮಳೆ

Sharmitha Gowda in bikini
ಕಿರುತೆರೆ8 months ago

Geetha Serial Kannada: ನಿದ್ದೆ ಕದ್ದ ಚೋರಿ! ನಟಿ `ಭಾನುಮತಿ’ ಹಾಟ್‌ ಪೋಟೊಗಳಿಗೆ ಫ್ಯಾನ್ಸ್ ಫುಲ್ ಫಿದಾ

Kannada Serials
ಕಿರುತೆರೆ8 months ago

Kannada Serials TRP: 2ನೇ ಸ್ಥಾನದಲ್ಲಿ 2 ಧಾರಾವಾಹಿಗಳು; ಟಿಆರ್‌ಪಿ ರೇಸ್‌ನಲ್ಲಿಲ್ಲ ಭಾಗ್ಯಲಕ್ಷ್ಮೀ!

Bigg Boss- Saregamapa 20 average TRP
ಕಿರುತೆರೆ8 months ago

Kannada Serials TRP: ಏಳನೇ ಸ್ಥಾನಕ್ಕೆ ʻಅಮೃತಧಾರೆʼ ಕುಸಿತ; ಬಿಗ್‌ ಬಾಸ್‌-ಸರಿಗಮಪ ಟಿಆರ್‌ಪಿ ಎಷ್ಟು?

galipata neetu
ಕಿರುತೆರೆ6 months ago

Kanyadana Serial: ಕಿರುತೆರೆಗೆ ಮತ್ತೆ ಎಂಟ್ರಿ ಕೊಟ್ಟ ʻಗಾಳಿಪಟʼ ಖ್ಯಾತಿಯ ʻನೀತುʼ!

Kannada Serials
ಕಿರುತೆರೆ8 months ago

Kannada Serials TRP: ನಾಲ್ಕನೇ ಸ್ಥಾನಕ್ಕೆ ಕುಸಿತ ಕಂಡ ʻಸೀತಾ ರಾಮʼ; ಟಿಆರ್‌ಪಿ ರೇಸ್‌ಗೆ ʻಭಾಗ್ಯಲಕ್ಷ್ಮಿʼ ಬ್ಯಾಕ್‌!

Kannada Serials
ಕಿರುತೆರೆ8 months ago

Kannada Serials TRP: ಟಿಆರ್‌ಪಿಯಲ್ಲಿ ʻಭಾಗ್ಯಲಕ್ಷ್ಮೀʼ ಹವಾ; ʻಪುಟ್ಟಕ್ಕನ ಮಕ್ಕಳುʼ ಧಾರಾವಾಹಿಗೆ ಸಂಕಷ್ಟ!

Bigg Boss' dominates TRP; Sita Rama fell to the sixth position
ಕಿರುತೆರೆ7 months ago

Kannada Serials TRP: ಟಿಆರ್‌ಪಿಯಲ್ಲಿ ʻಬಿಗ್ ಬಾಸ್ʼದೇ ಮೇಲುಗೈ; 6ನೇ ಸ್ಥಾನಕ್ಕೆ ಕುಸಿದ ʻಸೀತಾ ರಾಮʼ

geetha serial Dhanush gowda engagement
ಕಿರುತೆರೆ6 months ago

Dhanush Gowda: ಗೀತಾ ಧಾರಾವಾಹಿ ನಟನ ನಿಶ್ಚಿತಾರ್ಥ; ಭವ್ಯಾಳ ಕಮೆಂಟ್‌ ಬಾಕ್ಸ್‌ ಆಫ್‌!

varun
ಕಿರುತೆರೆ7 months ago

Brindavana Serial: ʼಬೃಂದಾವನʼ ಧಾರಾವಾಹಿಯಲ್ಲಿ ದೊಡ್ಡ ಟ್ವಿಸ್ಟ್‌; ಪ್ರಮುಖ ಪಾತ್ರಧಾರಿಯೇ ಬದಲು

Kannada Serials
ಕಿರುತೆರೆ9 months ago

Kannada Serials TRP: ಟಿಆರ್‌ಪಿಯಲ್ಲಿ ಏರಿಕೆ ಕಂಡ ʻಅಮೃತಧಾರೆʼ; ʻಗಟ್ಟಿಮೇಳʼಕ್ಕೆ ನಾಲ್ಕನೇ ಸ್ಥಾನ!

Lok Sabha Election Result 2024 Live
ದೇಶ15 hours ago

Lok Sabha Election Result 2024 Live: ಲೋಕಸಭೆ ಚುನಾವಣೆ ಫಲಿತಾಂಶದ ಲೈವ್‌ ಇಲ್ಲಿ ವೀಕ್ಷಿಸಿ

Karnataka Rain
ಮಳೆ1 day ago

Karnataka Rain : 133 ವರ್ಷದ ರೆಕಾರ್ಡ್ ಬ್ರೇಕ್ ಮಾಡಿದ ʻಬೆಂಗಳೂರು ಮಳೆʼ

Snake Rescue Snakes spotted in heavy rain
ಮಳೆ1 day ago

Snake Rescue: ಮಳೆ ನೀರಿನಲ್ಲಿ ಹರಿದು ಬಂದು ಬೈಕ್‌ನಲ್ಲಿ ಸೇರಿಕೊಂಡ ಹಾವು; ಮನೆಗಳಲ್ಲೂ ಪ್ರತ್ಯಕ್ಷ

Karnataka Rain
ಮಳೆ2 days ago

Karnataka Rain : ವೀಕೆಂಡ್‌ ಮೋಜಿಗೆ ವರುಣ ಅಡ್ಡಿ; ಭಾನುವಾರ ಸಂಜೆಗೆ ಮಳೆ ಕಾಟ

Liquor ban
ಬೆಂಗಳೂರು3 days ago

Liquor Ban : ಮುಂದಿನ ಏಳು ದಿನಗಳಲ್ಲಿ ನಾಲ್ಕೂವರೆ ದಿನ ಬಾರ್ ಕ್ಲೋಸ್; ಎಣ್ಣೆ ಸಿಗೋದು ಯಾವ ದಿನ?

Assault Case in Shivamogga
ಕ್ರೈಂ5 days ago

Assault Case : ಶಿವಮೊಗ್ಗದಲ್ಲಿ ಮತ್ತೆ ಬಾಲ ಬಿಚ್ಚಿದ ಪುಂಡರು; ಗಾಂಜಾ ನಶೆಯಲ್ಲಿ ವಾಹನಗಳು ಪೀಸ್‌ ಪೀಸ್‌

Karnataka weather Forecast
ಮಳೆ1 week ago

Karnataka Weather : ಚಿಕ್ಕಮಗಳೂರಲ್ಲಿ ಭಾರಿ ಮಳೆ; ಯಾದಗಿರಿಯಲ್ಲಿ ಕರೆಂಟ್‌ ಕಟ್‌, ಜನರೇಟರ್‌ನಿಂದ ಮೊಬೈಲ್‌ಗಳಿಗೆ ಚಾರ್ಜಿಂಗ್‌!

tumkur murder
ತುಮಕೂರು1 week ago

Tumkur Murder : ಮಗುವಿನ ಮುಂದೆಯೇ ಹೆಂಡತಿಯ ಕತ್ತು, ದೇಹವನ್ನು ಕತ್ತರಿಸಿ ಬಿಸಾಡಿದ ದುಷ್ಟ

Karnataka Weather Forecast
ಮಳೆ1 week ago

Karnataka Weather : ಕಡಲತೀರದಲ್ಲಿ ಅಲೆಗಳ ಅಬ್ಬರ, ಪ್ರವಾಸಿಗರಿಗೆ ಕಟ್ಟೆಚ್ಚರ; ನಾಳೆಯೂ ಗಾಳಿ ಸಹಿತ ಮಳೆ ಅಬ್ಬರ

Karnataka Rain
ಮಳೆ1 week ago

Karnataka Rain : ಯಾದಗಿರಿಯಲ್ಲಿ ಬಿರುಗಾಳಿ ಸಹಿತ ಮಳೆ; ಸಿಡಿಲು ಬಡಿದು ಎಮ್ಮೆಗಳು ಸಾವು

ಟ್ರೆಂಡಿಂಗ್‌