ʼಇನ್ನು ನಿನ್ನ ಸರದಿʼ; ಉದಯಪುರ ಹತ್ಯೆ ಬೆನ್ನಲ್ಲೇ ಬಿಜೆಪಿ ಉಚ್ಚಾಟಿತ ನವೀನ್‌ ಜಿಂದಾಲ್‌ಗೆ ಬೆದರಿಕೆ - Vistara News

ದೇಶ

ʼಇನ್ನು ನಿನ್ನ ಸರದಿʼ; ಉದಯಪುರ ಹತ್ಯೆ ಬೆನ್ನಲ್ಲೇ ಬಿಜೆಪಿ ಉಚ್ಚಾಟಿತ ನವೀನ್‌ ಜಿಂದಾಲ್‌ಗೆ ಬೆದರಿಕೆ

ನವೀನ್‌ ಜಿಂದಾಲ್‌ ಬಿಜೆಪಿಯ ದೆಹಲಿ ಮಾಧ್ಯಮ ಉಸ್ತುವಾರಿ ಆಗಿದ್ದರು. ಇಸ್ಲಾಂ ವಿರೋಧಿ ಪೋಸ್ಟ್‌ ಹಿನ್ನೆಲೆಯಲ್ಲಿ ಅವರನ್ನು ಬಿಜೆಪಿ ಪಕ್ಷದಿಂದ ಅಮಾನತು ಮಾಡಿತ್ತು.

VISTARANEWS.COM


on

Naveen Kumar Jindal
ನವೀನ್‌ ಜಿಂದಾಲ್‌
ಮಹತ್ವದ, ಕುತೂಹಲಕರ ಸುದ್ದಿಗಾಗಿ ಫಾಲೊ ಮಾಡಿ
Koo

ನವ ದೆಹಲಿ: ರಾಜಸ್ಥಾನದ ಉದಯಪುರದಲ್ಲಿ ಹಿಂದು ಯುವಕ ಕನ್ಹಯ್ಯ ಲಾಲ್‌ನ ತಲೆ ಕಡಿದು ಅತ್ಯಂತ ಕ್ರೌರ್ಯದಿಂದ ಹತ್ಯೆ ಮಾಡಿರುವುದರ ಬೆನ್ನಲ್ಲೇ, ಇಸ್ಲಾಂ ವಿರುದ್ಧ ಅವಹೇಳನಕಾರಿ ಟ್ವೀಟ್‌ ಮಾಡಿ ಬಿಜೆಪಿಯಿಂದ ಉಚ್ಚಾಟನೆಗೊಂಡಿರುವ ನವೀನ್‌ ಜಿಂದಾಲ್‌ಗೂ ಶಿರಚ್ಛೇದದ ಬೆದರಿಕೆ ಬಂದಿದೆ.

ಇಂದು (ಜೂ.29) ಬೆಳಗ್ಗೆ ಅವರಿಗೆ ಇ-ಮೇಲ್‌ ಮೂಲಕ ಜೀವ ಬೆದರಿಕೆ ಬಂದಿದೆ. ಆ ಸ್ಕ್ರೀನ್‌ ಶಾಟ್‌ಅನ್ನು ನವೀನ್‌ ಜಿಂದಾಲ್‌ ತಮ್ಮ ಟ್ವಿಟರ್‌ನಲ್ಲಿ ಶೇರ್‌ ಮಾಡಿಕೊಂಡಿದ್ದಾರೆ. “ಇಂದು ಮುಂಜಾನೆ 6.43ರ ವೇಳೆಯಲ್ಲಿ ನನಗೆ ಮೂರು ಇ-ಮೇಲ್‌ಗಳು ಬಂದಿವೆ. ಉದಯಪುರದಲ್ಲಿ ಕನ್ಹಯ್ಯ ಲಾಲ್‌ ಅವರ ತಲೆ ಕತ್ತರಿಸಿರುವ ವಿಡಿಯೋವನ್ನು ಇ-ಮೇಲ್‌ ಜತೆಗೆ ಲಗತ್ತಿಸಲಾಗಿದೆ. ಕನ್ಹಯ್ಯ ಆಯಿತು ಈಗ ನಿನ್ನ ಸರದಿ ಎಂದು ಎಚ್ಚರಿಕೆ ನೀಡಿದ್ದಾರೆ. ನನ್ನಿಡೀ ಕುಟುಂಬದವರ ಶಿರಚ್ಛೇದ ಮಾಡುವುದಾಗಿಯೂ ಹೇಳಿದ್ದಾರೆ” ಎಂದು ಅವರು ಬರೆದುಕೊಂಡಿದ್ದಾರೆ.

ಜ್ಞಾನವಾಪಿ ಮಸೀದಿ ಕೇಸ್‌ ಬಗ್ಗೆ ಸುಪ್ರೀಂಕೋರ್ಟ್‌ನಲ್ಲಿ ವಿಚಾರಣೆ ನಡೆಯುತ್ತಿರುವ ಸಂದರ್ಭದಲ್ಲಿ ನೂಪುರ್‌ ಶರ್ಮಾ ದೃಶ್ಯ ಮಾಧ್ಯಮವೊಂದಕ್ಕೆ ಚರ್ಚೆಗೆ ಹೋಗಿದ್ದರು. ಅಲ್ಲಿ ಅವರು ಪ್ರವಾದಿ ಮೊಹಮ್ಮದ್‌ರಿಗೆ ಅವಮಾನ ಆಗುವ ಮಾತುಗಳನ್ನಾಡಿದ್ದಾರೆ ಎಂಬ ಆರೋಪ ಕೇಳಿ ಬಂದಿತ್ತು. ಇತ್ತ ಬಿಜೆಪಿಯ ದೆಹಲಿ ಮಾಧ್ಯಮ ಉಸ್ತುವಾರಿಯಾಗಿದ್ದ ನವೀನ್‌ಕುಮಾರ್‌ ಜಿಂದಾಲ್‌ ಕೂಡ ತಮ್ಮ ಸೋಷಿಯಲ್‌ ಮೀಡಿಯಾದಲ್ಲಿ ಇಸ್ಲಾಂ ವಿರುದ್ಧದ ಪೋಸ್ಟ್‌ ಹಾಕಿದ್ದರು. ಇವರಿಬ್ಬರ ಕಾರಣಕ್ಕೆ ದೇಶದಲ್ಲಿ ಇಸ್ಲಾಂ ಸಮುದಾಯದವರ ಪ್ರತಿಭಟನೆ ಮಿತಿಮೀರಿತ್ತು. ಈ ಹಿನ್ನೆಲೆಯಲ್ಲಿ ಬಿಜೆಪಿಯು ನವೀನ್‌ ಜಿಂದಾಲ್‌ ಮತ್ತು ನೂಪುರ್‌ ಶರ್ಮಾರನ್ನು ಪಕ್ಷದಿಂದ ಹೊರ ಹಾಕಿತ್ತು. ಈಗ ಇವರಿಬ್ಬರಿಗೂ ಜೀವ ಬೆದರಿಕೆ ಕರೆಗಳು ಹೆಚ್ಚಾಗಿವೆ. ನೂಪುರ್‌ ಶರ್ಮಾ ಮತ್ತು ನವೀನ್‌ ಜಿಂದಾಲ್‌ಗೆ ಭದ್ರತೆ ಒದಗಿಸಲಾಗಿದೆ.

೪ ದಿನಗಳಲ್ಲಿ ಗಲ್ಲಿಗೇರಿಸಿ
ಉದಯಪುರದಲ್ಲಿ ಕನ್ಹಯ್ಯ ಲಾಲ್‌ ಹತ್ಯೆ ಮಾಡಿದ ಆರೋಪಿಗಳನ್ನು ಇನ್ನು 4 ದಿನಗಳಲ್ಲಿ ಗಲ್ಲಿಗೇರಿಸಬೇಕು ಎಂದು ರಾಜಸ್ಥಾನ ಸಚಿವ ಪ್ರತಾಪ್‌ ಸಿಂಗ್‌ ಖಚರಿಯಾವಾಸ್ ಆಗ್ರಹಿಸಿದ್ದಾರೆ. ನಿನ್ನೆ ಘಟನೆ ನಡೆದಾಗಿನಿಂದಲೂ ನಾನು ಒಳಗೊಳಗೇ ಕುದಿಯುತ್ತಿದ್ದೇನೆ. ಆರೋಪಿಗಳನ್ನು ಕೊಲ್ಲಬೇಕು. ಇನ್ನು ನಾಲ್ಕು ದಿನಗಳಲ್ಲಿ ಅವರನ್ನು ಗಲ್ಲಿಗೇರಿಸಬೇಕು ಎಂದು ಆಗ್ರಹಿಸಿದ್ದಾರೆ.

ಇದನ್ನೂ ಓದಿ: ಹಂತಕರಿಗೆ ಹತ್ಯೆಯ ಮೂಲಕವೇ ಪಾಠ ಕಲಿಸಬೇಕು; ಶಿರಚ್ಛೇದ ಘಟನೆಗೆ ಬಿಜೆಪಿ ನಾಯಕ ಈಶ್ವರಪ್ಪ ಆಕ್ರೋಶ

ಕ್ಷಣ ಕ್ಷಣದ ಮಾಹಿತಿಗಾಗಿ Vistara News FaceBook ಪೇಜ್ ಫಾಲೋ ಮಾಡಿ
ಮಹತ್ವದ ಮಾಹಿತಿಗಾಗಿ ವಿಸ್ತಾರ ನ್ಯೂಸ್ ಆ್ಯಪ್ ಉಚಿತವಾಗಿ ಡೌನ್ ಲೋಡ್ ಮಾಡಿಕೊಳ್ಳಿ: Andriod App | IOS App
Continue Reading
Click to comment

Leave a Reply

Your email address will not be published. Required fields are marked *

ದೇಶ

M‌ine Lift Collapse: ರಾಜಸ್ಥಾನ ಲಿಫ್ಟ್‌ ದುರಂತ: ಟ್ರ್ಯಾಪ್‌ ಆಗಿದ್ದ 14 ಮಂದಿ ರಕ್ಷಣೆ; ಒಬ್ಬ ಅಧಿಕಾರಿ ದಾರುಣ ಸಾವು

M‌ine Lift Collapse: ರಾಜಸ್ಥಾನದ ಜುಂಜೌನ್‌ ಜಿಲ್ಲೆಯ ಕೋಲಿಹಾನ್ ಗಣಿಯಲ್ಲಿ ಸಿಬ್ಬಂದಿಯನ್ನು ಸಾಗಿಸಲು ಬಳಸಲಾಗುವ ಲಂಬವಾದ ಶಾಫ್ಟ್ ಕುಸಿದಿತ್ತು. ಮಂಗಳವಾರ ರಾತ್ರಿ 8 ಗಂಟೆ ಸುಮಾರಿಗೆ ಶಾಫ್ಟ್ ಕುಸಿದಿದ್ದು, ಸ್ವಲ್ಪ ಸಮಯದ ನಂತರ ಆಂಬ್ಯುಲೆನ್ಸ್ ಮತ್ತು ರಕ್ಷಣಾ ತಂಡಗಳು ಸ್ಥಳಕ್ಕೆ ಆಗಮಿಸಿ ರಕ್ಷಣಾ ಕಾರ್ಯಾಚರಣೆ ಕೈಗೆತ್ತಿಕೊಂಡಿತ್ತು.

VISTARANEWS.COM


on

M‌ine Lift Collapse
Koo

ಜೈಪುರ: ರಾಜಸ್ಥಾನದ ನೀಮ್ ಕಾ ಥಾನಾ ಜಿಲ್ಲೆಯ ಕೋಲಿಹಾನ್ ತಾಮ್ರದ ಗಣಿಯಲ್ಲಿ (copper mine) ಲಿಫ್ಟ್ ಕುಸಿದು (M‌ine Lift Collapse) ಪಾತಾಳದಲ್ಲಿ ಸಿಲುಕಿದ್ದ 15 ವಿಜಿಲೆನ್ಸ್‌ ಅಧಿಕಾರಿಗಳಲ್ಲಿ 14 ಮಂದಿಯನ್ನು ರಕ್ಷಿಸಲಾಗಿದ್ದು, ಒಬ್ಬ ಅಧಿಕಾರಿ ದಾರುಣವಾಗಿ ಮೃತಪಟ್ಟಿದ್ದಾರೆ. ಇವರು ಪಿಎಸ್‌ಯು ಹಿಂದೂಸ್ತಾನ್ ಕಾಪರ್ ಲಿಮಿಟೆಡ್‌ನ (Hindustan copper Ltd) 14 ಅಧಿಕಾರಿಗಳು ಹಾಗೂ ವಿಜಿಲೆನ್ಸ್ ತಂಡದ ಸದಸ್ಯರಾಗಿದ್ದು, ಮಂಗಳವಾರ ರಾತ್ರಿ ಲಿಫ್ಟ್‌ ಕುಸಿದು ದುರಂತ ಸುಮಾರು 577 ಮೀಟರ್‌ ಆಳದಲ್ಲಿ ಸಿಲುಕಿಕೊಂಡಿದ್ದರು.

ರಾಜಸ್ಥಾನದ ಜುಂಜೌನ್‌ ಜಿಲ್ಲೆಯ ಕೋಲಿಹಾನ್ ಗಣಿಯಲ್ಲಿ ಸಿಬ್ಬಂದಿಯನ್ನು ಸಾಗಿಸಲು ಬಳಸಲಾಗುವ ಲಂಬವಾದ ಶಾಫ್ಟ್ ಕುಸಿದಿತ್ತು. ಮಂಗಳವಾರ ರಾತ್ರಿ 8 ಗಂಟೆ ಸುಮಾರಿಗೆ ಶಾಫ್ಟ್ ಕುಸಿದಿದ್ದು, ಸ್ವಲ್ಪ ಸಮಯದ ನಂತರ ಆಂಬ್ಯುಲೆನ್ಸ್ ಮತ್ತು ರಕ್ಷಣಾ ತಂಡಗಳು ಸ್ಥಳಕ್ಕೆ ಆಗಮಿಸಿ ರಕ್ಷಣಾ ಕಾರ್ಯಾಚರಣೆ ಕೈಗೆತ್ತಿಕೊಂಡಿತ್ತು. ಘಟನೆ ವರದಿಯಾದ ಕೂಡಲೇ ಬಿಜೆಪಿ ಶಾಸಕ ಧರ್ಮಪಾಲ್ ಗುರ್ಜರ್ ಸ್ಥಳಕ್ಕೆ ಆಗಮಿಸಿ ಪರಿಸ್ಥಿತಿಯನ್ನು ಅವಲೋಕಿಸಿದ್ದರು.

ಪ್ರಾಥಮಿಕ ಮಾಹಿತಿಯ ಪ್ರಕಾರ, ಸರ್ಕಾರಿ ಸ್ವಾಮ್ಯದ ಈ ಕಂಪನಿಯ ಹಿರಿಯ ಅಧಿಕಾರಿಗಳೊಂದಿಗೆ ವಿಜಿಲೆನ್ಸ್ ತಂಡವು ಪರಿಶೀಲನೆಗಾಗಿ ಗಣಿ ಒಳಗೆ ಹೋದಾಗ ಈ ಘಟನೆ ಸಂಭವಿಸಿದೆ. ಅವರು ಮೇಲಕ್ಕೆ ಬರಲು ಮುಂದಾದಾಗ, ಶಾಫ್ಟ್ ಅಥವಾ ʼಪಂಜರ’ದ ಹಗ್ಗ ಮುರಿದು ಸುಮಾರು 14 ಜನರು ಕೆಳಗೆ ಸಿಲುಕಿಕೊಂಡರು ಎಂದು ಪೊಲೀಸರು ತಿಳಿಸಿದ್ದಾರೆ.

ಒಟ್ಟು 14 ಅಧಿಕಾರಿಗಳನ್ನು ಸರಕ್ಷಿತವಾಗಿ ಹೊರತೆಗೆಯಾಗಿತ್ತು. ಅವರಲ್ಲಿ ಮೂವರ ಸ್ಥಿತಿ ಗಂಭೀರವಾಗಿತ್ತು. ಅವರನ್ನು ಜೈಪುರ ಆಸ್ಪತ್ರೆಗೆ ದಾಖಲಿಸಲಾಗಿತ್ತು. ದುರಂತದಲ್ಲಿ ಹಿರಿಯ ಅಧಿಕಾರಿ ಉಪೇಂದ್ರ ಪಾಂಡೆ ಚಿಕಿತ್ಸೆ ಫಲಕಾರಿಯಾಗದೇ ಕೊನೆಯುಸಿರೆಳೆದಿದ್ದರು. ಅವರ ಮೃತದೇಹವನ್ನು ಹೊರತೆಗೆಯಲಾಗಿದೆ. ಇನ್ನುಳಿದ ಅಧಿಕಾರಿಗಳ ಕೈ ಕಾಲುಗಳಿಗೆ ಗಂಭೀರ ಏಟುಗಳು ಬಿದ್ದಿವೆ. ಅವರಿಗೆ ಚಿಕಿತ್ಸೆ ನೀಡಲಾಗುತ್ತಿದೆ ಎಂದು ಜಿಲ್ಲಾಸ್ಪತ್ರೆ ವೈದ್ಯ ಪ್ರವೀಣ್‌ ಶರ್ಮಾ ಮಾಹಿತಿ ನೀಡಿದ್ದಾರೆ.

.

Continue Reading

ರಾಜಕೀಯ

Himanta Biswa Sarma: ಬಿಜೆಪಿಗೆ ಏಕೆ 400 ಸೀಟುಗಳು ಬೇಕೇಬೇಕು? ಹಿಮಂತ ಬಿಸ್ವ ಶರ್ಮಾ ಉತ್ತರ ಹೀಗಿದೆ!

ಬಿಜೆಪಿ 300 ಸ್ಥಾನಗಳನ್ನು ಪಡೆದಾಗ ಅಯೋಧ್ಯೆಯಲ್ಲಿ ರಾಮಮಂದಿರವನ್ನು ನಿರ್ಮಿಸಿದೆ ಮತ್ತು ಲೋಕಸಭೆ ಚುನಾವಣೆಯಲ್ಲಿ 400 ಸ್ಥಾನಗಳನ್ನು ಪಡೆದ ಅನಂತರ ಮಥುರಾದ ಕೃಷ್ಣ ಜನ್ಮಭೂಮಿ ಸ್ಥಳದಲ್ಲಿ ಮತ್ತು ವಾರಣಾಸಿಯ ಜ್ಞಾನವಾಪಿ ಮಸೀದಿಯ ಸ್ಥಳದಲ್ಲಿ ದೇವಾಲಯಗಳನ್ನು ನಿರ್ಮಿಸಲಾಗುವುದು ಎಂದು ಅಸ್ಸಾಂ ಮುಖ್ಯಮಂತ್ರಿ ಹಿಮಂತ ಬಿಸ್ವಾ ಶರ್ಮಾ (Himanta Biswa Sarma) ತಿಳಿಸಿದ್ದಾರೆ.

VISTARANEWS.COM


on

By

Himanta Biswa Sarma
Koo

ನವದೆಹಲಿ: ಲೋಕಸಭಾ ಚುನಾವಣೆಯಲ್ಲಿ (Lok sabha election) ಈ ಬಾರಿ ಹಲವು ನಿರ್ಣಾಯಕ ಕಾರಣಗಳಿಗಾಗಿ ಭಾರತೀಯ ಜನತಾ ಪಕ್ಷಕ್ಕೆ (BJP) ಸಂಸತ್ತಿನಲ್ಲಿ (Parliament) 400 ಸ್ಥಾನಗಳನ್ನು ಗೆಲ್ಲಲೇಬೇಕಾದ ಅನಿವಾರ್ಯತೆ ಇದೆ ಎಂದು ಅಸ್ಸಾಂ ಮುಖ್ಯಮಂತ್ರಿ (Assam Chief Minister) ಹಿಮಂತ ಬಿಸ್ವಾ ಶರ್ಮಾ (Himanta Biswa Sarma) ಹೇಳಿದ್ದಾರೆ.

ಬಿಜೆಪಿ 300 ಸ್ಥಾನಗಳನ್ನು ಪಡೆದಾಗ ಅಯೋಧ್ಯೆಯಲ್ಲಿ (ayodhya) ರಾಮಮಂದಿರವನ್ನು (ram mandir) ನಿರ್ಮಿಸಿದೆ ಮತ್ತು ಲೋಕಸಭೆ ಚುನಾವಣೆಯಲ್ಲಿ 400 ಸ್ಥಾನಗಳನ್ನು ಪಡೆದ ಅನಂತರ ಮಥುರಾದ (Mathura) ಕೃಷ್ಣ ಜನ್ಮಭೂಮಿ (Krishna Janmabhoomi) ಸ್ಥಳದಲ್ಲಿ ಮತ್ತು ವಾರಣಾಸಿಯ ಜ್ಞಾನವಾಪಿ ಮಸೀದಿಯ (Gyanvapi Mosque) ಸ್ಥಳದಲ್ಲಿ ದೇವಾಲಯಗಳನ್ನು ನಿರ್ಮಿಸಲಾಗುವುದು ಎಂದು ಅವರು ತಿಳಿಸಿದ್ದಾರೆ.

ಪಾಕಿಸ್ತಾನ ಆಕ್ರಮಿತ ಜಮ್ಮು ಮತ್ತು ಕಾಶ್ಮೀರವನ್ನು (ಪಿಒಜೆಕೆ) ಪ್ರಧಾನಿ ಮೋದಿ ನೇತೃತ್ವದಲ್ಲಿ ಭಾರತದಲ್ಲಿ ಸೇರಿಸಲಾಗುವುದು ಎಂದು ಹೇಳಿದ ಅವರು, ಕಾಂಗ್ರೆಸ್ ವಿರುದ್ಧ ವಾಗ್ದಾಳಿ ನಡೆಸಿದ್ದಾರೆ. ಕಾಂಗ್ರೆಸ್ ಆಡಳಿತದ ಅವಧಿಯಲ್ಲಿ ಪಾಕ್ ಆಕ್ರಮಿತ ಕಾಶ್ಮೀರದ ಬಗ್ಗೆ ಸಂಸತ್ತಿನಲ್ಲಿ ಯಾವುದೇ ಚರ್ಚೆ ನಡೆದಿರಲಿಲ್ಲ ಎಂದು ದೂರಿದ್ದಾರೆ.

ಪಿಒಕೆ ನಮ್ಮದು ಎಂಬ ಚರ್ಚೆಯೇ ಆಗಿಲ್ಲ

ಕಾಂಗ್ರೆಸ್ ಸರ್ಕಾರ ಅಧಿಕಾರದಲ್ಲಿದ್ದಾಗ, ಒಂದು ಕಾಶ್ಮೀರ ಭಾರತದಲ್ಲಿ ಮತ್ತು ಇನ್ನೊಂದು ಪಾಕಿಸ್ತಾನದಲ್ಲಿದೆ ಎಂದು ನಮಗೆ ಹೇಳಲಾಗಿತ್ತು. ಪಾಕಿಸ್ತಾನ ಆಕ್ರಮಿತ ಕಾಶ್ಮೀರವನ್ನು ಹೊಂದಿದೆ ಎಂದು ನಮ್ಮ ಸಂಸತ್ತಿನಲ್ಲಿ ಎಂದಿಗೂ ಚರ್ಚಿಸಲಾಗಿಲ್ಲ, ಅದು ನಿಜವಾಗಿ ನಮ್ಮದು. ಇದೀಗ ಪಿಒಕೆಯಲ್ಲಿ ಪ್ರತಿದಿನ ಆಂದೋಲನ ನಡೆಯುತ್ತಿದ್ದು, ಜನರು ತಮ್ಮ ಕೈಯಲ್ಲಿ ಭಾರತದ ತ್ರಿವರ್ಣ ಧ್ವಜವನ್ನು ಹಿಡಿದು ಪಾಕಿಸ್ತಾನದ ವಿರುದ್ಧ ಪ್ರತಿಭಟಿಸುತ್ತಿದ್ದಾರೆ. ಮೋದಿಜೀ 400 ಸೀಟುಗಳನ್ನು ಪಡೆದರೆ ಪಿಒಕೆ ಕೂಡ ಭಾರತಕ್ಕೆ ಸೇರುತ್ತದೆ. ಇದು ಈಗಾಗಲೇ ಪ್ರಾರಂಭವಾಗಿದೆ ಎಂದು ಹೇಳಿದ್ದಾರೆ.

ಬಿಜೆಪಿ ಸರ್ಕಾರವು ಮೀಸಲಾತಿಗೆ ಹೆಚ್ಚಿನ ಬಲವನ್ನು ನೀಡಲು ಕೆಲಸ ಮಾಡುತ್ತಿದೆ ಎಂದು ಪ್ರತಿಪಾದಿಸಿದ ಅವರು, ಪ್ರಧಾನಿ ಮೋದಿ ಸ್ವತಃ ಒಬಿಸಿ ವರ್ಗದಿಂದ ಬಂದವರು. ಬಿಜೆಪಿ 10 ವರ್ಷ ಅಧಿಕಾರದಲ್ಲಿದೆ. ನಮ್ಮ ಸರ್ಕಾರ ಮೀಸಲಾತಿಗೆ ಹೆಚ್ಚಿನ ಬಲ ನೀಡುವ ಕೆಲಸ ಮಾಡುತ್ತಿದೆ ಎಂದು ತಿಳಿಸಿದ್ದಾರೆ.

ಕರ್ನಾಟಕದಲ್ಲಿ ಈಗಾಗಲೇ ಆರಂಭಿಸಿರುವ ಎಸ್‌ಸಿ, ಎಸ್‌ಟಿ ಮತ್ತು ಒಬಿಸಿ ಮೀಸಲಾತಿಯನ್ನು ಕೊನೆಗೊಳಿಸಲು ಮತ್ತು ಮುಸ್ಲಿಮರಿಗೆ ಮೀಸಲಾತಿ ನೀಡಲು ಕಾಂಗ್ರೆಸ್ ಬಯಸಿದೆ ಎಂದು ಅವರು ಹೇಳಿದ್ದಾರೆ.

ಇದಕ್ಕೂ ಮೊದಲು, ಪಾಕ್ ಆಕ್ರಮಿತ ಜಮ್ಮು ಮತ್ತು ಕಾಶ್ಮೀರದಲ್ಲಿ (ಪಿಒಜೆಕೆ) ಪ್ರತಿಭಟನೆಗಳ ಕುರಿತು ಪ್ರತಿಕ್ರಿಯಿಸಿದ ವಿದೇಶಾಂಗ ವ್ಯವಹಾರಗಳ ಸಚಿವ ಎಸ್. ಜೈಶಂಕರ್, ಇದು ಭಾರತವಾಗಿದೆ ಮತ್ತು ಯಾವಾಗಲೂ ಇರುತ್ತದೆ ಎಂದು ಪುನರುಚ್ಚರಿಸಿದ್ದಾರೆ.

ಪಿಒಕೆ ಜನರು ತಮ್ಮ ಪರಿಸ್ಥಿತಿಯನ್ನು ಹೋಲಿಸಿ ನೋಡಬೇಕು. ಜಮ್ಮು ಮತ್ತು ಕಾಶ್ಮೀರದಲ್ಲಿ ವಾಸಿಸುತ್ತಿರುವ ಜನರು ಸ್ಪಷ್ಟ ಪ್ರಗತಿಯನ್ನು ಸೂಚಿಸುತ್ತಾರೆ ಎಂದು ಹೇಳಿದ್ದಾರೆ.

ಇದನ್ನೂ ಓದಿ: Shehbaz Sharif: ಎಲ್ಲ ಸರ್ಕಾರಿ ಸಂಸ್ಥೆಗಳನ್ನು ಮಾರಲು ನಿರ್ಧರಿಸಿದೆ ದಿವಾಳಿ ಪಾಕಿಸ್ತಾನ!

ಪಾಕಿಸ್ತಾನದ ಅರೆಸೈನಿಕ ರೇಂಜರ್‌ಗಳು ಸೋಮವಾರ, ಪಿಒಜೆಕೆ ನಲ್ಲಿ ಕಾನೂನುಬಾಹಿರವಾಗಿ ನಿಯೋಜಿಸಲ್ಪಟ್ಟರು. ಹಲವಾರು ಪ್ರತಿಭಟನಾಕಾರರನ್ನು ಗುಂಡಿಕ್ಕಿ ಕೊಂದರು ಮತ್ತು ಇದರಿಂದ ಅನೇಕ ಮಂದಿ ತೀವ್ರವಾಗಿ ಗಾಯಗೊಂಡರು. ಈ ಘಟನೆಯು ಪ್ರದೇಶದ ಹಲವಾರು ಸ್ಥಳೀಯರನ್ನು ಗಾಯಗೊಳಿಸಿತು. ಸಾವಿರಾರು ಸ್ಥಳೀಯರು ವಿದ್ಯುತ್ ಬಿಲ್‌ಗಳ ಮೇಲಿನ ತೆರಿಗೆಗಳು, ಸಬ್ಸಿಡಿಗಳಲ್ಲಿ ಕಡಿತ ಮತ್ತು ಪ್ರಧಾನಮಂತ್ರಿ ಮತ್ತು ರಾಷ್ಟ್ರಪತಿಗಳ ಸವಲತ್ತುಗಳು ಮತ್ತು ಸವಲತ್ತುಗಳನ್ನು ಕೊನೆಗೊಳಿಸುವುದರ ವಿರುದ್ಧ ತಮ್ಮ ಬೇಡಿಕೆಗಳನ್ನು ಎತ್ತಲು ಬೀದಿಗಿಳಿದಿದ್ದರು.

Continue Reading

ತಂತ್ರಜ್ಞಾನ

Facebook, Instagram Down: ಫೇಸ್‌ಬುಕ್‌, ಇನ್​ಸ್ಟಾಗ್ರಾಮ್​ ಸರ್ವರ್​ ಡೌನ್​; ಬಳಕೆದಾರರ ಪರದಾಟ

Facebook, Instagram Down: ಮೆಟಾ ಒಡೆತನದ ಫೇಸ್‌ಬುಕ್‌ (Facebook) ಹಾಗೂ ಇನ್‌ಸ್ಟಾಗ್ರಾಂ (Instagram) ಸರ್ವರ್‌ ಡೌನ್‌ (Server Down) ಆಗಿದ್ದು, ಸಾಮಾಜಿಕ ಜಾಲತಾಣಗಳಿಲ್ಲದೆ ಪ್ರಪಂಚದಾದ್ಯಂತದ ಜನ ಪರದಾಡುತ್ತಿದ್ದಾರೆ (Facebook, Instagram Down). ಸಾವಿರಾರು ಬಳಕೆದಾರರ ಫೇಸ್‌ಬುಕ್‌ ಮತ್ತು ಇನ್‌ಸ್ಟಾಗ್ರಾಂ ವಿಶ್ವಾದ್ಯಂತ ಕಾರ್ಯನಿರ್ವಹಿಸುತ್ತಿಲ್ಲ ಎಂದು ಇಂಟರ್‌ನೆಟ್‌ ಟ್ರಾಫಿಕ್‌ ಮೇಲೆ ನಿಗಾ ಇರಿಸುವ ಡೌನ್‌ ಡಿಟೆಕ್ಟರ್‌ ಸಂಸ್ಥೆ ಹೇಳಿದೆ.

VISTARANEWS.COM


on

Facebook, Instagram Down
Koo

ನವದೆಹಲಿ: ಮೆಟಾ ಒಡೆತನದ ಫೇಸ್‌ಬುಕ್‌ (Facebook) ಹಾಗೂ ಇನ್‌ಸ್ಟಾಗ್ರಾಂ (Instagram) ಸರ್ವರ್‌ ಡೌನ್‌ (Server Down) ಆಗಿದ್ದು, ಸಾಮಾಜಿಕ ಜಾಲತಾಣಗಳಿಲ್ಲದೆ ಪ್ರಪಂಚದಾದ್ಯಂತದ ಜನ ಪರದಾಡುತ್ತಿದ್ದಾರೆ (Facebook, Instagram Down). ಇಂಟರ್‌ನೆಟ್‌ ಟ್ರಾಫಿಕ್‌ ಮೇಲೆ ನಿಗಾ ಇರಿಸುವ ಡೌನ್‌ ಡಿಟೆಕ್ಟರ್‌ ಸಂಸ್ಥೆಯ ಪ್ರಕಾರ, ಸಾವಿರಾರು ಬಳಕೆದಾರರ ಫೇಸ್‌ಬುಕ್‌ ಮತ್ತು ಇನ್‌ಸ್ಟಾಗ್ರಾಂ ವಿಶ್ವಾದ್ಯಂತ ಕಾರ್ಯನಿರ್ವಹಿಸುತ್ತಿಲ್ಲ. ಈ ಬಗ್ಗೆ ಸುಮಾರು 18,000ಕ್ಕೂ ಹೆಚ್ಚು ವರದಿಗಳು ಬಂದಿದ್ದು, ಆ ಪೈಕಿ ಶೇ. 59ರಷ್ಟು ಮಂದಿ ಅಪ್ಲಿಕೇಶನ್ ಪ್ರವೇಶಿಸುವಾಗ ಸಮಸ್ಯೆಗಳನ್ನು ಎದುರಿಸಿದರೆ ಶೇ. 34ರಷ್ಟು ಬಳಿಕೆದಾರರು ಸರ್ವರ್ ಸಂಪರ್ಕ ಸಮಸ್ಯೆಗಳಿಂದ ಬಳಲುತ್ತಿದ್ದಾರೆ. ಶೇ. 7ರಷ್ಟು ಮಂದಿಗೆ ಲಾಗಿನ್ ಮಾಡುವಾಗ ಸಮಸ್ಯೆ ಕಂಡು ಬಂದಿದೆ.

ಫೇಸ್‌ಬುಕ್‌ ಮತ್ತು ಇನ್‌ಸ್ಟಾಗ್ರಾಂ ಬಳಕೆದಾರರು ತಾವು ಎದುರಿಸುತ್ತಿರುವ ಸಮಸ್ಯೆಗಳ ಕುರಿತು ಸಾಮಾಜಿಕ ಜಾಲತಾಣ ಎಕ್ಸ್‌ನಲ್ಲಿ ಮಾಹಿತಿ ಹಂಚಿಕೊಂಡಿದ್ದಾರೆ. ಆ್ಯಪ್‌ ಓಪನ್‌ ಮಾಡುವಾಗ ʼSomething went wrong. There’s an issue and the page could not be loadedʼ, ʼError loading media’ ಮುಂತಾದ ಮೆಸೇಜ್‌ ಕಂಡು ಬರುತ್ತಿದೆ ಎಂದು ಬಳಕೆದಾರರು ದೂರಿದ್ದಾರೆ. ಇಂಟರ್‌ನೆಟ್‌ ಮೇಲ್ವಿಚಾರಣಾ ಗುಂಪು ನೆಟ್‌ಬ್ಲಾಕ್ಸ್‌ (NetBlocks) ಕೂಡ ಎರಡು ಸಾಮಾಜಿಕ ಜಾಲತಾಣದ ವೆಬ್‌ಸೈಟ್‌ಗಳು ಪ್ರಸ್ತುತ ‘ಅಂತಾರಾಷ್ಟ್ರೀಯ ಸ್ಥಗಿತಗಳನ್ನು’ ಅನುಭವಿಸುತ್ತಿವೆ ಎಂಬ ಅಂಶವನ್ನು ಗಮನಿಸಿದೆ.

“ಇನ್‌ಸ್ಟಾಗ್ರಾಂ ಮತ್ತು ಫೇಸ್‌ಬುಕ್‌ ಸೇರಿದಂತೆ ಮೆಟಾ ಪ್ಲಾಟ್‌ಫಾರ್ಮ್‌ಗಳು ಪ್ರಸ್ತುತ ಅಂತಾರಾಷ್ಟ್ರೀಯ ಸ್ಥಗಿತಗಳನ್ನು ಅನುಭವಿಸುತ್ತಿವೆ. ಇದು ದೇಶೀಯ ಮಟ್ಟದ ಇಂಟರ್‌ನೆಟ್‌ ಅಡೆತಡೆಗಳು ಅಥವಾ ಫಿಲ್ಟರಿಂಗ್‌ಗೆ ಸಂಬಂಧಿಸಿಲ್ಲ” ಎಂದು ನೆಟ್‌ಬ್ಲಾಕ್ಸ್‌ ತಿಳಿಸಿದೆ. ವಿಶೇಷವೆಂದರೆ ಈ ವರ್ಷದ ಮಾರ್ಚ್‌ನಲ್ಲಿಯೂ ಇದೇ ರೀತಿಯ ಸಮಸ್ಯೆ ಕಂಡು ಬಂದಿತ್ತು. ಪ್ರಪಂಚದಾದ್ಯಂತದ ಲಕ್ಷಾಂತರ ಬಳಕೆದಾರರು ತಮ್ಮ ಫೇಸ್‌ಬುಕ್‌ ಮತ್ತು ಇನ್‌ಸ್ಟಾಗ್ರಾಂ ಖಾತೆ ಲಾಗ್ ಔಟ್ ಆಗುತ್ತಿರುವ ಬಗ್ಗೆ ದೂರು ನೀಡಿದ್ದರು.

ನೆಟ್ಟಿಗರು ಏನಂದ್ರು?

ಮೆಟಾ ಫ್ಲಾಟ್‌ಫಾರ್ಮ್‌ನಲ್ಲಿ ಪದೇ ಪದೆ ಇಂತಹ ಸಮಸ್ಯೆ ಎದುರಾಗುತ್ತಿರುವ ಬಗ್ಗೆ ನೆಟ್ಟಿಗರು ಅಸಮಾಧಾನ ವ್ಯಕ್ತಪಡಿಸಿದ್ದಾರೆ. ಬೇರೆ ಯಾವ ಅಪ್ಲಿಕೇಷನ್‌ಗಳಲ್ಲಿಯೂ ಇಷ್ಟರ ಮಟ್ಟಿಗೆ ಸಮಸ್ಯೆ ಕಂಡುಬರುತ್ತಿಲ್ಲ ಎಂದು ಹೇಳಿದ್ದಾರೆ. ಪರಿಸ್ಥಿತಿಯಿಂದ ನಿರಾಶೆಗೊಂಡ ಬಳಕೆದಾರರೊಬ್ಬರು ಫೇಸ್‌ಬುಕ್‌ ಮತ್ತು ಇನ್‌ಸ್ಟಾಗ್ರಾಂ ಸ್ಥಗಿತದ ಬಗೆಗಿನ ನೆಟ್‌ಬ್ಲಾಕ್ಸ್‌ ಪೋಸ್ಟ್‌ಗೆ ಪ್ರತಿಕ್ರಿಯಿಸಿ, “ಬಹುಶಃ ಈ ಸಮಸ್ಯೆ ಬಗೆಹರಿಯುವಂತೆ ಕಾಣಿಸುತ್ತಿಲ್ಲʼʼ ಎಂದು ಹೇಳಿದ್ದಾರೆ. ʼʼಮೆಟಾ ಸರ್ವರ್‌ನಲ್ಲಿ ಸಮಸ್ಯೆ ಎದುರಾಗಿರಬೇಕು. ಅದೇ ಕಾರಣಕ್ಕೆ ಫೇಸ್‌ಬುಕ್‌ ಕೂಡ ಕೆಲಸ ಮಾಡುತ್ತಿಲ್ಲʼʼ ಎಂದು ಮತ್ತೊಬ್ಬರು ಕಮೆಂಟ್‌ ಮಾಡಿದ್ದಾರೆ.

ಇದನ್ನೂ ಓದಿ: Facebook Server: ಫೇಸ್‌ಬುಕ್‌, ಇನ್‌ಸ್ಟಾಗ್ರಾಂ ಸರ್ವರ್‌ ಡೌನ್;‌ ನಿಮ್ಮ ಖಾತೆ ಚೆಕ್‌ ಮಾಡಿಕೊಳ್ಳಿ

ಈ ವರ್ಷ ಮಾರ್ಚ್‌ನಲ್ಲಿ ಫೇಸ್‌ಬುಕ್‌ ಹಾಗೂ ಇನ್‌ಸ್ಟಾಗ್ರಾಂ ಸರ್ವರ್‌ ಡೌನ್‌ ಆಗಿತ್ತು. ಕೆಲಹೊತ್ತು ಮೊಬೈಲ್‌ ಹಾಗೂ ಕಂಪ್ಯೂಟರ್‌ನಲ್ಲಿ ಎರಡೂ ಖಾತೆಗಳು ಲಾಗ್‌ಔಟ್‌ ಆಗಿದ್ದು, ಮತ್ತೆ ಲಾಗ್‌ಇನ್‌ ಆಗುತ್ತಿರಲಿಲ್ಲ. ಫೇಸ್‌ಬುಕ್‌ ಹಾಗೂ ಇನ್‌ಸ್ಟಾಗ್ರಾಂ ಇಲ್ಲದೆ ಜನ ಅಸಮಾಧಾನ ವ್ಯಕ್ತಪಡಿಸಿದ ಬೆನ್ನಲ್ಲೇ ಮೆಟಾ ಕಂಪನಿಯು ಪ್ರತಿಕ್ರಿಯಿಸಿದ್ದು, ಜನರ ಕ್ಷಮೆಯಾಚಿಸಿತ್ತು.

Continue Reading

ದೇಶ

Madhavi Raje Scindia: ಕೇಂದ್ರ ಸಚಿವ ಜ್ಯೋತಿರಾದಿತ್ಯ ಸಿಂಧಿಯಾಗೆ ಮಾತೃ ವಿಯೋಗ

Madhavi Raje Scindia:ಮಾಧವಿರಾಜೆ ಅವರ ಅಂತ್ಯಕ್ರಿಯೆಯನ್ನು ಮಧ್ಯಪ್ರದೇಶದ ಗ್ವಾಲಿಯರ್‌ನಲ್ಲಿ ನಡೆಸಲು ಕುಟುಂಬಸ್ಥರು ನಿರ್ಧರಿಸಿದ್ದಾರೆ. ಅಂತ್ಯಕ್ರಿಯೆಯಲ್ಲಿ ಕೇಂದ್ರ ಸಚಿವರು ಪಕ್ಷದ ಮುಖಂಡರು, ರಾಜಕಾರಣಿಗಳು ಭಾಗಿಯಾಗುವ ಸಾಧ್ಯತೆ ಇದೆ. ಇನ್ನು ಮಾಧವಿ ರಾಜೆ ನೇಪಾಳದ ರಾಜಮನೆತನಕ್ಕೆ ಸೇರಿದವರಾಗಿದ್ದು, ಅವರು ಮಹಾರಾಜ ಎರಡನೇ ಮಾಧವ್‌ ರಾವ್‌ ಸಿಂದಿಯಾ ಅವರನ್ನು ವಿವಾಹವಾಗಿದ್ದರು.

VISTARANEWS.COM


on

Madhavi Raje Scindia
Koo

ನವದೆಹಲಿ: ಕೇಂದ್ರ ಸಚಿವ ಜ್ಯೋತಿರಾದಿತ್ಯ ಸಿಂಧಿಯಾ(Jyotiraditya Scindia) ಅವರ ತಾಯಿ ಮಾಧವಿ ರಾಜೆ ಸಿಂಧಿಯಾ(Madhavi Raje Scindia) ಅವರು ಇಂದು ಬೆಳೆಗ್ಗೆ ವಿಧಿವಶರಾಗಿದ್ದಾರೆ. ಕೆಲವು ದಿನಗಳಿಂದ ತೀವ್ರ ಅನಾರೋಗ್ಯಕ್ಕೆ ತುತ್ತಾಗಿ ಆಸ್ಪತ್ರೆಯಲ್ಲಿದ್ದ ಮಾಧವಿ ರಾಜೆ ಚಿಕಿತ್ಸೆ ಫಲಕಾರಿಯಾಗದೇ ಕೊನೆಯುಸಿರೆಳೆದಿದ್ದಾರೆ. ನ್ಯೂಮೋನಿಯಾದಿಂದ ಬಳಲುತ್ತಿದ್ದ ಮಾಧವಿ ರಾಜೆ ಅವರು ದಿಲ್ಲಿಯ ಏಮ್ಸ್‌ ಆಸ್ಪತ್ರೆಯ(AIIMS Delhi) ತುರ್ತು ನಿಗಾ ಘಟಕದಲ್ಲಿ ಕಳೆದ ಮೂರು ತಿಂಗಳುಗಳಿಂದ ಚಿಕಿತ್ಸೆ ಪಡೆಯುತ್ತಿದ್ದರು. ಕೆಲವು ದಿನಗಳಿಂದ ಅವರ ಆರೋಗ್ಯದಲ್ಲಿ ಬಹಳಷ್ಟು ಏರುಪೇರಾಗಿದ್ದು, ಅವರನ್ನು ವೆಂಟಿಲೇಟರ್‌ನಲ್ಲಿ ಇಡಲಾಗಿತ್ತು. ಇಂದು ಬೆಳಗ್ಗೆ 9.28ಕ್ಕೆ ಅವರು ಕೊನೆಯುಸಿರೆಳೆದಿದ್ದಾರೆ ಎಂದು ಅಧಿಕೃತ ಮೂಲಗಳು ತಿಳಿಸಿವೆ.

ಗ್ವಾಲಿಯರ್‌ನಲ್ಲಿ ಅಂತ್ಯಕ್ರಿಯೆ

ಮಾಧವಿರಾಜೆ ಅವರ ಅಂತ್ಯಕ್ರಿಯೆಯನ್ನು ಮಧ್ಯಪ್ರದೇಶದ ಗ್ವಾಲಿಯರ್‌ನಲ್ಲಿ ನಡೆಸಲು ಕುಟುಂಬಸ್ಥರು ನಿರ್ಧರಿಸಿದ್ದಾರೆ. ಅಂತ್ಯಕ್ರಿಯೆಯಲ್ಲಿ ಕೇಂದ್ರ ಸಚಿವರು ಪಕ್ಷದ ಮುಖಂಡರು, ರಾಜಕಾರಣಿಗಳು ಭಾಗಿಯಾಗುವ ಸಾಧ್ಯತೆ ಇದೆ. ಇನ್ನು ಮಾಧವಿ ರಾಜೆ ನೇಪಾಳದ ರಾಜಮನೆತನಕ್ಕೆ ಸೇರಿದವರಾಗಿದ್ದು, ಅವರು ಮಹಾರಾಜ ಎರಡನೇ ಮಾಧವ್‌ ರಾವ್‌ ಸಿಂದಿಯಾ ಅವರನ್ನು ವಿವಾಹವಾಗಿದ್ದರು. ಅವರು ಶಿಕ್ಷಣ, ಮೆಡಿಕಲ್‌ ಕೇರ್‌ ಸೇರಿದಂತೆ ಒಟ್ಟು 24 ಟ್ರಸ್ಟ್‌ಗಳ ಅಧ್ಯಕ್ಷರೂ ಆಗಿದ್ದರು. ಅಲ್ಲದೇ ಕೇವಲ ಬಾಲಕಿಯರಿಗೆ ಶಿಕ್ಷಣ ನೀಡುವ ಸಿಂದಿಯಾ ಕನ್ಯಾ ವಿದ್ಯಾಲಯ ಶಿಕ್ಷಣ ಸಂಸ್ಥೆಯ ಮುಖ್ಯಸ್ಥರೂ ಹೌದು. ತಮ್ಮ ಪತಿ ಎರಡನೇ ಮಾಧವ್‌ ರಾವ್‌ ಸಿಂಧಿಯಾ ಅವರ ಸ್ಮರಣಾರ್ಥ ಮಹರಾಜ್‌ ಮಾಧವ್‌ ರಾವ್‌ ಸಿಂಧಿಯಾ ವಸ್ತು ಸಂಗ್ರಹಾಲಯವನ್ನೂ ನಿರ್ಮಿಸಿದ್ದರು.

ಸೆ. 30, 2001 ರಂದು ಹಿರಿಯ ಕಾಂಗ್ರೆಸ್‌ ಮುಖಂಡರಾಗಿದ್ದ ಮಾಧವ್‌ ರಾವ್‌ ಸಿಂಧಿಯಾ ಉತ್ತರಪ್ರದೇಶದ ಮಣಿಪುರಿಯಲ್ಲಿ ಸಂಭವಿಸಿದ ವಿಮಾನ ಅಪಘಾತದಲ್ಲಿ ಮೃತಪಟ್ಟಿದ್ದರು. ಇನ್ನು ನಾಗರಿಕ ವಿಮಾನಯಾನ ಸಚಿವರಾಗಿರುವ ಜ್ಯೋತಿರಾದಿತ್ಯ ಸಿಂಧಿಯಾ ಈ ಬಾರಿ ಮಧ್ಯಪ್ರದೇಶದ ಗುನ ಕ್ಷೇತ್ರದಲ್ಲಿ ಕಣಕ್ಕಿಳಿದಿದ್ದಾರೆ. ತಾಯಿಯ ಅಗಲಿಕೆಯಿಂದ ಅವರು ಆಘಾತಕೊಳಗಾಗಿದ್ದಾರೆ.

ಇದನ್ನೂ ಓದಿ:Shrimad Ramayana: ಕಿರುತೆರೆಯಲ್ಲಿ ಪ್ರಸಾರವಾಗಲಿದೆ ‘ಶ್ರೀಮದ್ ರಾಮಾಯಣ’ ಮಹಾ ಕಾವ್ಯ: ಎಲ್ಲಿ? ಯಾವಾಗ?

Continue Reading
Advertisement
M‌ine Lift Collapse
ದೇಶ1 min ago

M‌ine Lift Collapse: ರಾಜಸ್ಥಾನ ಲಿಫ್ಟ್‌ ದುರಂತ: ಟ್ರ್ಯಾಪ್‌ ಆಗಿದ್ದ 14 ಮಂದಿ ರಕ್ಷಣೆ; ಒಬ್ಬ ಅಧಿಕಾರಿ ದಾರುಣ ಸಾವು

Cannes 2024 seven Indian Films To Be Screened
ಸಿನಿಮಾ16 mins ago

Cannes 2024: ʻಕಾನ್ ಫಿಲ್ಮ್ ಫೆಸ್ಟಿವಲ್‌ʼನಲ್ಲಿ ಪ್ರದರ್ಶನ ಕಾಣಲಿರುವ ಭಾರತೀಯ ಸಿನಿಮಾಗಳಿವು

pes university student self harming
ಕ್ರೈಂ21 mins ago

Student Self Harming: ಪ್ರತಿಷ್ಠಿತ ಕಾಲೇಜು ಕಟ್ಟಡದಿಂದ ಜಿಗಿದು ಎಂಜಿನಿಯರಿಂಗ್‌ ವಿದ್ಯಾರ್ಥಿ ಆತ್ಮಹತ್ಯೆ

Prajwal Revanna Case Prajwal case controlled by Congress government says R Ashok
ರಾಜಕೀಯ28 mins ago

Prajwal Revanna Case: ಕಾಂಗ್ರೆಸ್‌ ಸರ್ಕಾರದಿಂದ ಪ್ರಜ್ವಲ್‌ ಕೇಸ್‌ ನಿಯಂತ್ರಣ; ಡೈವರ್ಟ್‌ ಮಾಡಲು ಬಿಜೆಪಿಗರ ಮೇಲೆ ದಾಳಿ ಎಂದ ಅಶೋಕ್‌!

Himanta Biswa Sarma
ರಾಜಕೀಯ34 mins ago

Himanta Biswa Sarma: ಬಿಜೆಪಿಗೆ ಏಕೆ 400 ಸೀಟುಗಳು ಬೇಕೇಬೇಕು? ಹಿಮಂತ ಬಿಸ್ವ ಶರ್ಮಾ ಉತ್ತರ ಹೀಗಿದೆ!

Facebook, Instagram Down
ತಂತ್ರಜ್ಞಾನ42 mins ago

Facebook, Instagram Down: ಫೇಸ್‌ಬುಕ್‌, ಇನ್​ಸ್ಟಾಗ್ರಾಮ್​ ಸರ್ವರ್​ ಡೌನ್​; ಬಳಕೆದಾರರ ಪರದಾಟ

Madhavi Raje Scindia
ದೇಶ54 mins ago

Madhavi Raje Scindia: ಕೇಂದ್ರ ಸಚಿವ ಜ್ಯೋತಿರಾದಿತ್ಯ ಸಿಂಧಿಯಾಗೆ ಮಾತೃ ವಿಯೋಗ

woman murder case kengeri
ಕ್ರೈಂ1 hour ago

Murder Case: ಪ್ರಿಯತಮನ ಜೊತೆ ಶೋಕಿಗಾಗಿ ಮನೆ ಮಾಲಕಿಯ ಕೊಲೆ ಮಾಡಿದ ಯುವತಿ ಸೆರೆ

Anchor Anushree talking with fans on instagram live
ಕಿರುತೆರೆ1 hour ago

Anchor Anushree: ಖುಷಿಯಾಗಿದ್ರೂ ಕಷ್ಟ, ಸಾಧನೆ ಹೊಗಳಿದ್ರೆ ಬಕೆಟ್‌ ಅಂತೀರಾ: ಅನುಶ್ರೀ ಬೇಸರ

NewsClick case
ದೇಶ2 hours ago

NewsClick Case: ಚೀನಾ ಪರ ಪ್ರಚಾರ; ಬಂಧನದಲ್ಲಿದ್ದ ನ್ಯೂಸ್‌ಕ್ಲಿಕ್‌ ಸಂಸ್ಥಾಪಕ ಪ್ರಬೀರ್‌ ಪುರಕಾಯಸ್ಥ ರಿಲೀಸ್‌

Sharmitha Gowda in bikini
ಕಿರುತೆರೆ7 months ago

Geetha Serial Kannada: ನಿದ್ದೆ ಕದ್ದ ಚೋರಿ! ನಟಿ `ಭಾನುಮತಿ’ ಹಾಟ್‌ ಪೋಟೊಗಳಿಗೆ ಫ್ಯಾನ್ಸ್ ಫುಲ್ ಫಿದಾ

Kannada Serials
ಕಿರುತೆರೆ7 months ago

Kannada Serials TRP: 2ನೇ ಸ್ಥಾನದಲ್ಲಿ 2 ಧಾರಾವಾಹಿಗಳು; ಟಿಆರ್‌ಪಿ ರೇಸ್‌ನಲ್ಲಿಲ್ಲ ಭಾಗ್ಯಲಕ್ಷ್ಮೀ!

Bigg Boss- Saregamapa 20 average TRP
ಕಿರುತೆರೆ7 months ago

Kannada Serials TRP: ಏಳನೇ ಸ್ಥಾನಕ್ಕೆ ʻಅಮೃತಧಾರೆʼ ಕುಸಿತ; ಬಿಗ್‌ ಬಾಸ್‌-ಸರಿಗಮಪ ಟಿಆರ್‌ಪಿ ಎಷ್ಟು?

galipata neetu
ಕಿರುತೆರೆ6 months ago

Kanyadana Serial: ಕಿರುತೆರೆಗೆ ಮತ್ತೆ ಎಂಟ್ರಿ ಕೊಟ್ಟ ʻಗಾಳಿಪಟʼ ಖ್ಯಾತಿಯ ʻನೀತುʼ!

Kannada Serials
ಕಿರುತೆರೆ8 months ago

Kannada Serials TRP: ನಾಲ್ಕನೇ ಸ್ಥಾನಕ್ಕೆ ಕುಸಿತ ಕಂಡ ʻಸೀತಾ ರಾಮʼ; ಟಿಆರ್‌ಪಿ ರೇಸ್‌ಗೆ ʻಭಾಗ್ಯಲಕ್ಷ್ಮಿʼ ಬ್ಯಾಕ್‌!

Kannada Serials
ಕಿರುತೆರೆ7 months ago

Kannada Serials TRP: ಟಿಆರ್‌ಪಿಯಲ್ಲಿ ʻಭಾಗ್ಯಲಕ್ಷ್ಮೀʼ ಹವಾ; ʻಪುಟ್ಟಕ್ಕನ ಮಕ್ಕಳುʼ ಧಾರಾವಾಹಿಗೆ ಸಂಕಷ್ಟ!

Bigg Boss' dominates TRP; Sita Rama fell to the sixth position
ಕಿರುತೆರೆ7 months ago

Kannada Serials TRP: ಟಿಆರ್‌ಪಿಯಲ್ಲಿ ʻಬಿಗ್ ಬಾಸ್ʼದೇ ಮೇಲುಗೈ; 6ನೇ ಸ್ಥಾನಕ್ಕೆ ಕುಸಿದ ʻಸೀತಾ ರಾಮʼ

geetha serial Dhanush gowda engagement
ಕಿರುತೆರೆ5 months ago

Dhanush Gowda: ಗೀತಾ ಧಾರಾವಾಹಿ ನಟನ ನಿಶ್ಚಿತಾರ್ಥ; ಭವ್ಯಾಳ ಕಮೆಂಟ್‌ ಬಾಕ್ಸ್‌ ಆಫ್‌!

varun
ಕಿರುತೆರೆ6 months ago

Brindavana Serial: ʼಬೃಂದಾವನʼ ಧಾರಾವಾಹಿಯಲ್ಲಿ ದೊಡ್ಡ ಟ್ವಿಸ್ಟ್‌; ಪ್ರಮುಖ ಪಾತ್ರಧಾರಿಯೇ ಬದಲು

Kannada Serials
ಕಿರುತೆರೆ8 months ago

Kannada Serials TRP: ಟಿಆರ್‌ಪಿಯಲ್ಲಿ ಏರಿಕೆ ಕಂಡ ʻಅಮೃತಧಾರೆʼ; ʻಗಟ್ಟಿಮೇಳʼಕ್ಕೆ ನಾಲ್ಕನೇ ಸ್ಥಾನ!

Prajwal Revanna Case
ಕರ್ನಾಟಕ6 hours ago

Prajwal Revanna Case: ಪ್ರಜ್ವಲ್‌ ರೇವಣ್ಣ ಇಂದೇ ಜರ್ಮನಿಯಿಂದ ಭಾರತಕ್ಕೆ? ಎಸ್‌ಐಟಿ ಅಲರ್ಟ್‌

Dina Bhavishya
ಭವಿಷ್ಯ8 hours ago

Dina Bhavishya : ಭೂ ವ್ಯವಹಾರಕ್ಕೆ ಇದು ಸೂಕ್ತ ಸಮಯ; ವ್ಯಾಪಾರದಲ್ಲಿ ಡಬಲ್‌ ಲಾಭ

HD Revanna Released first reaction after release will be acquitted of all charges
ರಾಜಕೀಯ18 hours ago

HD Revanna Released: ರಿಲೀಸ್‌ ಬಳಿಕ ರೇವಣ್ಣ ಫಸ್ಟ್‌ ರಿಯಾಕ್ಷನ್;‌ ನ್ಯಾಯಾಂಗದ ಮೇಲೆ ನಂಬಿಕೆ ಇದೆ; ಆರೋಪ ಮುಕ್ತನಾಗುವೆ

CM Siddaramaiah says Our government is stable for 5 years BJP will disintegrate
Lok Sabha Election 202420 hours ago

CM Siddaramaiah: ನಮ್ಮ ಸರ್ಕಾರ 5 ವರ್ಷ ಸುಭದ್ರ; ಚುನಾವಣೆ ಬಳಿಕ ಬಿಜೆಪಿ ಛಿದ್ರ ಎಂದ ಸಿಎಂ ಸಿದ್ದರಾಮಯ್ಯ!

I dont want to go to other states for Lok Sabha Election 2024 campaign for Congress says CM Siddaramaiah
Lok Sabha Election 202424 hours ago

CM Siddaramaiah: ಕಾಂಗ್ರೆಸ್‌ ಪರ ಬೇರೆ ರಾಜ್ಯಗಳಿಗೆ ಪ್ರಚಾರಕ್ಕೆ ಹೋಗಲು ನನಗೆ ಇಷ್ಟವಿಲ್ಲ: ಸಿಎಂ ಸಿದ್ದರಾಮಯ್ಯ!

HD Revanna Bail I am not happy that Revanna has been released says HD Kumaraswamy
ರಾಜಕೀಯ1 day ago

HD Revanna Bail: ರೇವಣ್ಣ ಬಿಡುಗಡೆಯಾಗಿದ್ದಕ್ಕೆ ನಾನಂತೂ ಖುಷಿ ಪಡಲ್ಲ ಎಂದ ಎಚ್‌ಡಿಕೆ!

karnataka Rain Effected
ಬೆಂಗಳೂರು1 day ago

Karnataka Rain: ಮಿಡ್‌ನೈಟ್‌ ಮಳೆ ಅವಾಂತರ; ಮರಗಳು, ವಿದ್ಯುತ್‌ ಕಂಬಗಳು ಧರೆಗೆ, ಕುಸಿದು ಬಿದ್ದ ಮನೆ

Dina Bhavishya
ಭವಿಷ್ಯ1 day ago

Dina Bhavishya : ಉದ್ಯೋಗದ ಸ್ಥಳದಲ್ಲಿ ನಿಮ್ಮ ವಿರುದ್ಧ ಪಿತೂರಿ ಮಾಡ್ಬಹುದು ಎಚ್ಚರ!

HD Revanna Bail Revanna will not leave the country condition imposed by the court
ಕ್ರೈಂ2 days ago

HD Revanna Bail: ರೇವಣ್ಣ ದೇಶ ಬಿಡಂಗಿಲ್ಲ, ಕೆ.ಆರ್‌. ನಗರಕ್ಕೆ ಎಂಟ್ರಿ ಕೊಡಂಗಿಲ್ಲ! ಕೋರ್ಟ್‌ ವಿಧಿಸಿದ ಷರತ್ತು ಏನು?

HD Revanna Bail
ಕ್ರೈಂ2 days ago

HD Revanna Bail: ಎಚ್‌.ಡಿ ರೇವಣ್ಣಗೆ ಕೊನೆಗೂ ಜಾಮೀನು; ಎಸ್‌ಐಟಿಗೆ ಮುಖಭಂಗ!

ಟ್ರೆಂಡಿಂಗ್‌