Maha politics: ಗುವಾಹಟಿಯಿಂದ ಗೋವಾಕ್ಕೆ ಶಿಂಧೆ ಬಣ ಹಾರಲು ವಿಮಾನ ರೆಡಿ, ಆದರೆ ಹೋಲ್ಡಾನ್! - Vistara News

ದೇಶ

Maha politics: ಗುವಾಹಟಿಯಿಂದ ಗೋವಾಕ್ಕೆ ಶಿಂಧೆ ಬಣ ಹಾರಲು ವಿಮಾನ ರೆಡಿ, ಆದರೆ ಹೋಲ್ಡಾನ್!

Maha Politics: ಗುವಾಹಟಿಯಲ್ಲಿರುವ ಶಿಂಧೆ ಬಣದ ಶಾಸಕರಿಗೆ ಗೋವಾಕ್ಕೆ ಹಾರಲು ವಿಮಾನ ರೆಡಿ ಆಗಿದೆ. 3.30ಕ್ಕೆಹಾರುತ್ತದೆ ಎಂದು ಹೇಳಲಾದ ವಿಮಾನ ಸದ್ಯ ವಿಳಂಬವಾಗಲಿದೆ ಎಂದು ಹೇಳಲಾಗುತ್ತಿದೆ. ಹಾಗಿದ್ದರೆ ಯಾಕೆ?

VISTARANEWS.COM


on

Eknath Shindhe in Kamakhya temple
ಏಕನಾಥ್‌ ಶಿಂಧೆ ಅವರು ಬುಧವಾರ ಗುವಾಹಟಿಯ ಕಾಮಾಖ್ಯ ದೇವಸ್ಥಾನಕ್ಕೆ ಭೇಟಿ ನೀಡಿದರು.
ಮಹತ್ವದ, ಕುತೂಹಲಕರ ಸುದ್ದಿಗಾಗಿ ಫಾಲೊ ಮಾಡಿ
Koo

ಮುಂಬಯಿ: ಗುರುವಾರ ಮಹಾರಾಷ್ಟ್ರ ವಿಧಾನಸಭೆಯಲ್ಲಿ ನಡೆಯಲಿರುವ ಅತ್ಯಂತ ಮಹತ್ವದ ವಿಶ್ವಾಸ ಮತ ಯಾಚನೆಯಲ್ಲಿ ಪಾಲ್ಗೊಳ್ಳಬೇಕಿರುವ ಶಿವಸೇನೆಯ ಏಕನಾಥ್‌ ಶಿಂಧೆ ಬಣ ಗುವಾಹಟಿಯಿಂದ ಗೋವಾಗೆ ಹಾರಲು ಸಕಲ ರೀತಿಯಲ್ಲಿ ಸಜ್ಜಾಗಿದೆ. ಎಲ್ಲರೂ ತಮ್ಮ ತಮ್ಮ ಬಟ್ಟೆ ಬರೆಗಳನ್ನು ಪ್ಯಾಕ್‌ ಮಾಡಿ ಇಟ್ಟುಕೊಂಡಿದ್ದಾರೆ.

ಶಿಂಧೆ ಬಣದಲ್ಲಿರುವ ಐವತ್ತು ಶಾಸಕರ ಪೈಕಿ ೧೦ ಮಂದಿ ಮುಂಬಯಿಗೆ ನೇರವಾಗಿ ತೆರಳಲಿದ್ದಾರೆ. ಉಳಿದ ೪೦ ಮಂದಿ ಗೋವಾಕ್ಕೆ ತೆರಳಲಿದ್ದಾರೆ. ಗುರುವಾರ ವಿಮಾನದ ಮೂಲಕ ಮುಂಬಯಿಗೆ ತೆರಳಿ ನೇರವಾಗಿ ವಿಧಾನಸಭೆ ಪ್ರವೇಶ ಮಾಡಲಿದ್ದಾರೆ ಎಂದು ಹೇಳಲಾಗಿದೆ.

ಗೋವಾದ ತಾಜ್‌ ರೆಸಿಡೆಂಟ್‌ ಹೋಟೆಲ್‌ನಲ್ಲಿ ಭಿನ್ನ ಶಾಸಕರು ಉಳಿಯಲಿದ್ದು, ಅವರಿಗಾಗಿ ೭೦ ಕೋಣೆಗಳನ್ನು ಬುಕ್‌ ಮಾಡಲಾಗಿದೆ. ಸಂಜೆ ೩.೩೦ಕ್ಕೆ ಗುವಾಹಟಿಯಿಂದ ಶಾಸಕರನ್ನು ಹೊತ್ತ ಸ್ಪೈಸ್‌ ಜೆಟ್‌ ಚಾರ್ಟರ್ಡ್‌ ವಿಮಾನ ಗೋವಾಕ್ಕೆ ಹಾರಲಿದೆ ಎಂದು ನಿಗದಿಯಾಗಿದೆ. ಆವತ್ತು ಶಾಸಕರು ಸೂರತ್‌ನಿಂದ ಗುವಾಹಟಿಗೆ ಹಾರಿಬಂದ ವಿಮಾನವೇ ಇದು.

ಇದೆಲ್ಲದಕ್ಕೆ ಪೂರಕವಾಗಿ ಶಿಂಧೆ ಬಣದ ಶಾಸಕರು ಬುಧವಾರ ಬೆಳಗ್ಗಿನಿಂದಲೇ ಸಿದ್ಧತೆಯಲ್ಲಿ ತೊಡಗಿದ್ದಾರೆ. ಏಕನಾಥ್‌ ಶಿಂಧೆ ಅವರು ಬೆಳಗ್ಗೆ ಗುವಾಹಟಿಯ ಕಾಮಾಖ್ಯ ದೇವಿ ದೇವಸ್ಥಾನಕ್ಕೆ ಭೇಟಿ ನೀಡಿ ಪ್ರಾರ್ಥನೆ ಸಲ್ಲಿಸಿದರು. ಉಳಿದ ಶಾಸಕರು ವಿಶೇಷವಾಗಿ ವ್ಯವಸ್ಥೆ ಮಾಡಿದ ಬಸ್ಸಿನಲ್ಲಿ ಗುವಾಹಟಿ ಸಿಟಿ ರೌಂಡ್ಸ್‌ ಹೊಡೆದರು. ಜತೆಗೆ ಎಲ್ಲರೂ ತಮ್ಮ ತಮ್ಮ ಬಟ್ಟೆ ಬರೆಗಳನ್ನು ಜೋಡಿಸಿಟ್ಟು ರೆಡಿಯಾಗಿದ್ದಾರೆ.

ಈ ನಡುವೆ, ೩.೩೦ಕ್ಕೇ ವಿಮಾನವೇರಿ ಗೋವಾಕ್ಕೆ ಹೋಗುವ ಪ್ಲ್ಯಾನ್‌ನಲ್ಲಿ ಸಣ್ಣ ಬದಲಾವಣೆ ಆಗಿರುವ ಮಾಹಿತಿ ಬರುತ್ತಿದೆ.
ಮಹಾರಾಷ್ಟ್ರ ರಾಜಕೀಯಕ್ಕೆ ಸಂಬಂಧಿಸಿದ ಮಹತ್ವದ ವಿಚಾರಣೆ ಸುಪ್ರೀಂಕೋರ್ಟ್‌ನಲ್ಲಿ ಬುಧವಾರ ಸಂಜೆ ಐದು ಗಂಟೆಗೆ ನಡೆಯಲಿದೆ. ಈ ವಿಚಾರಣೆ ಅತ್ಯಂತ ಮಹತ್ವದ್ದಾಗಿದ್ದು, ಅದರಲ್ಲಿ ಯಾವ ತೀರ್ಮಾನ ಹೊರಬೀಳಲಿದೆ ಎನ್ನುವುದು ಕಾದು ಮುಂದಿನ ನಿರ್ಧಾರ ತೆಗೆದುಕೊಳ್ಳಲಾಗುವುದು ಎಂದು ತಿಳಿದುಬಂದಿದೆ. ಹೀಗಾಗಿ ೩.೩೦ರ ವಿಮಾನ ಪ್ರಯಾಣ ಸಂಜೆ ೬ ಗಂಟೆ ಬಳಿಕ ಮರುನಿಗದಿಯಾಗಲಿದೆ ಎಂದು ತಿಳಿದುಬಂದಿದೆ.

ಇದನ್ನೂ ಓದಿ| Maha politics: ನಾಳೆ ಸಂಜೆ 5 ಗಂಟೆಗೆ ಅಧಿವೇಶನ ಫಿಕ್ಸ್‌, ವಿಶ್ವಾಸಮತ ಸಾಬೀತುಪಡಿಸಲು ಠಾಕ್ರೆಗೆ ಆದೇಶ

ಕ್ಷಣ ಕ್ಷಣದ ಮಾಹಿತಿಗಾಗಿ Vistara News FaceBook ಪೇಜ್ ಫಾಲೋ ಮಾಡಿ
ಮಹತ್ವದ ಮಾಹಿತಿಗಾಗಿ ವಿಸ್ತಾರ ನ್ಯೂಸ್ ಆ್ಯಪ್ ಉಚಿತವಾಗಿ ಡೌನ್ ಲೋಡ್ ಮಾಡಿಕೊಳ್ಳಿ: Andriod App | IOS App
Continue Reading
Click to comment

Leave a Reply

Your email address will not be published. Required fields are marked *

ದೇಶ

Human trafficking Case: ದೇಶಾದ್ಯಂತ NIA ರೇಡ್‌; ಮಾನವ ಕಳ್ಳಸಾಗಣೆ ಜಾಲ ಬಯಲು

Human trafficking Case:ಮಹಾರಾಷ್ಟ್ರ, ಉತ್ತರ ಪ್ರದೇಶ, ಬಿಹಾರ, ಗುಜರಾತ್, ದೆಹಲಿ, ಹರಿಯಾಣ, ಪಂಜಾಬ್ ಮತ್ತು ಚಂಡೀಗಢಯ ಒಟ್ಟು 15 ಸ್ಥಳಗಳಲ್ಲಿ ದಾಳಿ ನಡೆಸಿದ ಎನ್‌ಐಎ ಐವರನ್ನು ಬಂಧಿಸಿದೆ ಬಂಧಿತ ಆರೋಪಿಗಳನ್ನು ವಡೋದರದ ಮನೀಶ್ ಹಿಂಗು, ಗೋಪಾಲ್‌ಗಂಜ್‌ನ ಪಹ್ಲಾದ್ ಸಿಂಗ್, ನೈಋತ್ಯ ದೆಹಲಿಯ ನಬಿಯಾಲಂ ರೇ, ಗುರುಗ್ರಾಮದ ಬಲ್ವಂತ್ ಕಟಾರಿಯಾ ಮತ್ತು ಚಂಡೀಗಢದ ಸರ್ತಾಜ್ ಸಿಂಗ್ ಎಂದು ಗುರುತಿಸಲಾಗಿದೆ. ಇನ್ನು ಎನ್‌ಐಎ ರಾಜ್ಯ ಪೊಲೀಸ್‌ ಮತ್ತು ಕೇಂದ್ರೀಯ ಗುಪ್ತಚರ ಇಲಾಖೆ ಜೊತೆಗೂಡಿ ಈ ರೇಡ್‌ ನಡೆಸಿದೆ.

VISTARANEWS.COM


on

Human trafficking
Koo

ನವದೆಹಲಿ: ರಾಷ್ಟ್ರೀಯ ತನಿಖಾ ಸಂಸ್ಥೆ (NIA) ಆರು ರಾಜ್ಯಗಳು ಮತ್ತು ಕೇಂದ್ರಾಡಳಿತ ಪ್ರದೇಶಗಳಲ್ಲಿ ದಾಳಿ ನಡೆಸಿದ್ದು, ಭಾರೀ ಮಾನವ ಕಳ್ಳಸಾಗಣೆ(Human trafficking Case) ಜಾಲವನ್ನು ಬೇಧಿಸಿದೆ. ಇನ್ನು ಪ್ರಕರಣಕ್ಕೆ ಸಂಬಂಧಿಸಿದಂತೆ ಒಟ್ಟು ಐವರನ್ನು ಅರೆಸ್ಟ್‌ ಮಾಡಿದ್ದಾರೆ. ಈ ಆರೋಪಿಗಳು ಕೆಲಸ ಕೊಡಿಸುವುದಾಗಿ ನಂಬಿಸಿ ಭಾರತೀಯ ಯುವಕರನ್ನು ವಿದೇಶಕ್ಕೆ ಕಳ್ಳಸಾಗಾಟ ಮಾಡುತ್ತಿದ್ದರು ಎನ್ನಲಾಗಿದೆ.

15 ಸ್ಥಳಗಳಲ್ಲಿ ಶೋಧ ಕಾರ್ಯ

ಮಹಾರಾಷ್ಟ್ರ, ಉತ್ತರ ಪ್ರದೇಶ, ಬಿಹಾರ, ಗುಜರಾತ್, ದೆಹಲಿ, ಹರಿಯಾಣ, ಪಂಜಾಬ್ ಮತ್ತು ಚಂಡೀಗಢಯ ಒಟ್ಟು 15 ಸ್ಥಳಗಳಲ್ಲಿ ದಾಳಿ ನಡೆಸಿದ ಎನ್‌ಐಎ ಐವರನ್ನು ಬಂಧಿಸಿದೆ ಬಂಧಿತ ಆರೋಪಿಗಳನ್ನು ವಡೋದರದ ಮನೀಶ್ ಹಿಂಗು, ಗೋಪಾಲ್‌ಗಂಜ್‌ನ ಪಹ್ಲಾದ್ ಸಿಂಗ್, ನೈಋತ್ಯ ದೆಹಲಿಯ ನಬಿಯಾಲಂ ರೇ, ಗುರುಗ್ರಾಮದ ಬಲ್ವಂತ್ ಕಟಾರಿಯಾ ಮತ್ತು ಚಂಡೀಗಢದ ಸರ್ತಾಜ್ ಸಿಂಗ್ ಎಂದು ಗುರುತಿಸಲಾಗಿದೆ. ಇನ್ನು ಎನ್‌ಐಎ ರಾಜ್ಯ ಪೊಲೀಸ್‌ ಮತ್ತು ಕೇಂದ್ರೀಯ ಗುಪ್ತಚರ ಇಲಾಖೆ ಜೊತೆಗೂಡಿ ಈ ರೇಡ್‌ ನಡೆಸಿದೆ. ಇನ್ನು ಘಟನೆಗೆ ಸಂಬಂಧಿಸಿದಂತೆ ವಿವಿಧ ರಾಜ್ಯ ಮತ್ತು ಕೇಂದ್ರಾಡಳಿತ ಪ್ರದೇಶಗಳಲ್ಲಿ ಎಂಟು FIR ದಾಖಲಾಗಿವೆ

ಎನ್‌ಐಎ ತನಿಖೆಯಿಂದ ಆರೋಪಿಗಳು ಕಾನೂನುಬದ್ಧ ಉದ್ಯೋಗದ ಸುಳ್ಳು ಭರವಸೆಯ ಮೇಲೆ ಭಾರತೀಯ ಯುವಕರನ್ನು ವಿದೇಶಿ ದೇಶಗಳಿಗೆ ಆಮಿಷವೊಡ್ಡುವ ಮತ್ತು ಕಳ್ಳಸಾಗಣೆ ಮಾಡುವ ಸಂಘಟಿತ ಕಳ್ಳಸಾಗಣೆ ಸಿಂಡಿಕೇಟ್‌ನಲ್ಲಿ ತೊಡಗಿಸಿಕೊಂಡಿದ್ದಾರೆ ಎಂದು ತಿಳಿದುಬಂದಿದೆ. “ಯುವಕರು ಲಾವೋಸ್, ಗೋಲ್ಡನ್ ಟ್ರಯಾಂಗಲ್ ಸ್ಪೆಷಲ್ ಎಕನಾಮಿಕ್ ಝೋನ್ (SEZ), ಮತ್ತು ಕಾಂಬೋಡಿಯಾದ ಇತರ ಸ್ಥಳಗಳಲ್ಲಿ ನಕಲಿ ಕಾಲ್ ಸೆಂಟರ್‌ಗಳಲ್ಲಿ ಕೆಲಸ ಮಾಡಲು ಬಲವಂತ ಮಾಡಲಾಗುತ್ತದೆ. ಈ ಕಾಲ್‌ ಸೆಂಟರ್‌ ಮುಖ್ಯವಾಗಿ ವಿದೇಶಿ ಪ್ರಜೆಗಳಿಂದ ನಿಯಂತ್ರಿಸಲ್ಪಡುತ್ತದೆ ಎಂದು ಎನ್‌ಐಎ ಹೇಳಿದೆ.

ಕೆಲವು ವಾರಗಳ ಹಿಂದೆ ಕೇರಳದಲ್ಲೂ ಇಂತಹದ್ದೇ ಒಂದು ಜಾಲವನ್ನು ಸಿಬಿಐ ಬಯಲಿಗೆಳೆದಿತ್ತು. ಯುದ್ಧ ಪೀಡಿತ ರಷ್ಯಾ ಮತ್ತು ಉಕ್ರೇನ್‌(Russia-Ukraine War)ಗೆ ಮಾನವ ಕಳ್ಳಸಾಗಾಟ(Human trafficking) ಮಾಡುತ್ತಿದ್ದ ಕೇರಳದ ತಿರುವನಂತಪುರಂ ಮೂಲದ ಇಬ್ಬರನ್ನು ಕೇಂದ್ರೀಯ ತನಿಖಾ ಸಂಸ್ಥೆ(CBI) ಬಂಧಿಸಿತ್ತು. ಟ್ರಾವೆಲ್‌ ಏಜೆಂಟ್‌ಗಳ ಮೋಸದಾಟಕ್ಕೆ ಬಲಿಯಾಗಿ ವಿದೇಶಕ್ಕೆ ಹೋಗಿ ಯುವಕರು ಸಂಕಷ್ಟ ಎದುರಿಸುತ್ತಿರುವ ಘಟನೆಗಳು ಆಗಾಗ ಬೆಳಕಿಗೆ ಬರುತ್ತಿರುತ್ತವೆ. ಟ್ರಾವೆಲ್‌ ಏಕೆಂಟ್‌ಗಳ ಮೇಲೆ ಕಣ್ಣಿಟ್ಟ ಸಿಬಿಐಗೆ ಈ ದಂಧೆ ಬೆಳಕಿಗೆ ಬಂದಿತ್ತು.

ಈ ಟ್ರಾವೆಲ್‌ ಏಜೆಂಟ್‌ಗಳು ರಷ್ಯಾದಲ್ಲಿ ಕೆಲಸ ಕೊಡಿಸುವುದಾಗ ಭಾರತೀಯ ಯುವಕರನ್ನು ನಂಬಿಸಿ, ಅಲ್ಲಿಗೆ ಕಳುಹಿಸಿ ಅವರ ಪಾಸ್‌ಪೋರ್ಟ್‌ಗಳನ್ನು ಕಿತ್ತುಕೊಂಡು ಯುದ್ಧ ಪೀಡಿತ ಪ್ರದೇಶಕ್ಕೆ ಕಳಿಸುತ್ತಿದ್ದರು. ಪ್ರಕರಣಕ್ಕೆ ಸಂಬಂಧಿಸಿದಂತೆ ದೇಶಾದ್ಯಂತ 17 ವಿಸಾ ಕಂಪನಿಗಳು ಹಾಗೂ ಅದರ ಮಾಲಕರು, ಏಜೆಂಟ್‌ಗಳ ವಿರುದ್ಧ ಸಿಬಿಐ ಎಫ್‌ಐಆರ್‌ ದಾಖಲಿದೆ. ಅವರ ವಿರುದ್ಧ ಸಂಚು, ವಂಚನೆ ಮತ್ತು ಮಾನವ ಕಳ್ಳಸಾಗಣೆ ಪ್ರಕರಣಗಳನ್ನು ದಾಖಲಿಸಲಾಗಿದೆ.

ಏಜೆಂಟ್‌ಗಳ ಮೂಲಕ ಭಾರತೀಯ ಯುವಕರನ್ನು ರಷ್ಯಾ ಸೇನೆ, ಭದ್ರತಾ ಸಿಬ್ಬಂದಿ ಅಥವಾ ಇತರೆ ಕ್ಷೇತ್ರಗಳಲ್ಲಿ ಕೆಲಸ ಕೊಡಿಸುವುದಾಗಿ ನಂಬಿಸಿ ರಷ್ಯಾಗೆ ಕಳುಹಿಸಿಕೊಡಲಾಗುತ್ತದೆ. ಸಂತ್ರಸ್ತರಿಂದ ಇದಕ್ಕಾಗಿ ಏಜೆಂಟ್‌ಗಳು ಸ್ವಲ್ಪ ಹಣವನ್ನೂ ಪಡೆಯುತ್ತಾರೆ. ಅಲ್ಲಿ ಕಾಲಿಟ್ಟೊಡನೇ ಅವರ ಪಾಸ್‌ಪೋರ್ಟ್‌ ಕಿತ್ತುಕೊಂಡು ರಷ್ಯಾ ಸೇನೆಗೆ ಒತ್ತಾಯಪೂರ್ವಕವಾಗಿ ಸೇರಿಸಲಾಗುತ್ತದೆ. ಅಲ್ಲಿ ಅವರಿಗೆ ಯುದ್ಧ ತರಬೇತಿ ನೀಡಿ ಅಲ್ಲಿಂದ ಅವರನ್ನು ಯುದ್ಧ ಪೀಡಿತ ಪ್ರದೇಶಗಳಿಗೆ ಕಳಿಸುತ್ತಾರೆ.

ಇದನ್ನೂ ಓದಿ:Deepfake Case: ವಿದ್ಯಾರ್ಥಿನಿಯ ಡೀಪ್‌ ಫೇಕ್‌ ಫೋಟೋ ಸೃಷ್ಟಿ ಮಾಡಿದ ಅದೇ ಶಾಲೆಯ 2 ಹುಡುಗರು ಡಿಬಾರ್

Continue Reading

ದೇಶ

Stone Quarry Collapses: ಕಲ್ಲಿನ ಗಣಿ ಕುಸಿದು 10 ಮಂದಿ ಜೀವಂತ ಸಮಾಧಿ; ರಕ್ಷಣಾ ಕಾರ್ಯಾಚರಣೆಗೆ ಭೀಕರ ಮಳೆ ಅಡ್ಡಿ

Stone Quarry Collapses: ಮಿಜೋರಾಂನಲ್ಲಿ ಇಂದು (ಮೇ 28) ಭೀಕರ ಅವಘಡವೊಂದು ಸಂಭವಿಸಿದ್ದು, ಕಲ್ಲಿನ ಗಣಿ ಕುಸಿದು ಕನಿಷ್ಠ 10 ಮಂದಿ ಮೃತಪಟ್ಟು, ಹಲವು ಮಂದಿ ನಾಪತ್ತೆಯಾಗಿದ್ದಾರೆ. ಮಿಜೋರಾಂನ ಐಜ್ವಾಲ್ ಜಿಲ್ಲೆಯಲ್ಲಿ ಈ ದುರಂತ ಸಂಭವಿಸಿದೆ. ʼʼಭೀಕರ ಮಳೆ ಕಾರಣದಿಂದ ಗಣಿ ಕುಸಿದು ಇದರಲ್ಲಿ ಕೆಲಸ ಮಾಡುತ್ತಿದ್ದ ಸುಮಾರು ಹತ್ತು ಮಂದಿ ಕಾರ್ಮಿಕರು ಮೃತಪಟ್ಟಿದ್ದಾರೆ. ನಾಪತ್ತೆಯಾದವರಿಗಾಗಿ ಶೋಧ ಮುಂದುವರಿದಿದ್ದು, ರಕ್ಷಣಾ ಕಾರ್ಯಾಚರಣೆ ನಡೆಸಲಾಗುತ್ತಿದೆʼʼ ಎಂದು ಮೂಲಗಳು ತಿಳಿಸಿವೆ.

VISTARANEWS.COM


on

Stone Quarry Collapses
Koo

ಐಜ್ವಾಲ್:‌ ರಣ ಭೀಕರ ಮಳೆಗೆ ದೇಶದ ಕೆಲವೊಂದು ಭಾಗಗಳು ತತ್ತರಿಸಿ ಹೋಗಿವೆ. ಈಗಾಗಲೇ ಅನೇಕ ಅನಾಹುತ ನಡೆದು ಹಲವು ಮಂದಿ ಪ್ರಾಣ ತೆತ್ತಿದ್ದಾರೆ. ಇನ್ನು ಮಿಜೋರಾಂನಲ್ಲಿ ಇಂದು (ಮೇ 28) ಭೀಕರ ಅವಘಡವೊಂದು ಸಂಭವಿಸಿದ್ದು, ಕಲ್ಲಿನ ಗಣಿ ಕುಸಿದು (Stone Quarry Collapses) ಕನಿಷ್ಠ 10 ಮಂದಿ ಮೃತಪಟ್ಟು, ಹಲವು ಮಂದಿ ನಾಪತ್ತೆಯಾಗಿದ್ದಾರೆ.

ಮಿಜೋರಾಂನ ಐಜ್ವಾಲ್ ಜಿಲ್ಲೆಯಲ್ಲಿ ಈ ದುರಂತ ಸಂಭವಿಸಿದೆ. ʼʼಭೀಕರ ಮಳೆ ಕಾರಣದಿಂದ ಗಣಿ ಕುಸಿದು ಇದರಲ್ಲಿ ಕೆಲಸ ಮಾಡುತ್ತಿದ್ದ ಸುಮಾರು ಹತ್ತು ಮಂದಿ ಕಾರ್ಮಿಕರು ಮೃತಪಟ್ಟಿದ್ದಾರೆ. ನಾಪತ್ತೆಯಾದವರಿಗಾಗಿ ಶೋಧ ಮುಂದುವರಿದಿದ್ದು, ರಕ್ಷಣಾ ಕಾರ್ಯಾಚರಣೆ ನಡೆಸಲಾಗುತ್ತಿದೆʼʼ ಎಂದು ಮೂಲಗಳು ತಿಳಿಸಿವೆ.

ಮಳೆ ಅಡ್ಡಿ

“ಈ ಪ್ರದೇಶದಲ್ಲಿ ಸುರಿಯುತ್ತಿರುವ ನಿರಂತರ ಮಳೆ ಮತ್ತು ಭೂ ಕುಸಿತ ಶೋಧ ಕಾರ್ಯಾಚರಣೆಗೆ ಅಡ್ಡಿಯಾಗುತ್ತಿದೆ” ಎಂದು ಅಧಿಕಾರಿಗಳು ಹೇಳಿದ್ದಾರೆ. ಮಂಗಳವಾರ ಬೆಳಿಗ್ಗೆ 6ರ ಸುಮಾರಿಗೆ ಐಜ್ವಾಲ್‌ ನಗರದ ಹೊರ ವಲಯದಲ್ಲಿರುವ ಮೆಲ್ಥುಮ್‌ ಮತ್ತು ಹ್ಲಿಮೆನ್‌ ಪ್ರದೇಶದ ನಡುವಿನ ಕಲ್ಲಿನ ಗಣಿಯಲ್ಲಿ ಈ ದುರಂತ ಸಂಭವಿಸಿದೆ.

ಸದ್ಯ 5 ಮೃತದೇಹವನ್ನು ಹೊರ ತೆಗೆಯಲಾಗಿದೆ. ಸುರಿಯುತ್ತಿರುವ ಮಳೆಯಿಂದ ರಾಜ್ಯದ ವಿವಿಧ ಭಾಗಗಳಲ್ಲಿ ಭೂಕುಸಿತ ಸಂಭವಿಸುತ್ತಿದೆ. ಹಂಥಾರ್‌ ಬಳಿ ರಾಷ್ಟ್ರೀಯ ಹೆದ್ದಾರಿ 6ಕ್ಕೆ ಮಣ್ಣು ಜರಿದು ಬಿದ್ದು ಇತರ ಪ್ರದೇಶಗಳೊಂದಿಗಿನ ಐಜ್ವಾಲ್‌ನ ಸಂಪರ್ಕ ಕಡಿತಗೊಂಡಿದೆ ಎಂದು ಪೊಲೀಸರು ಮಾಹಿತಿ ನೀಡಿದ್ದಾರೆ. ಇದರ ಜತೆಗೆ ವಿವಿಧ ಕಡೆಗಳ ರಸ್ತೆ ಸಂಪರ್ಕವೂ ಕಡಿತಗೊಂಡಿದೆ ಎಂದು ಮೂಲಗಳು ತಿಳಿಸಿವೆ.

ಮಳೆಯ ಕಾರಣದಿಂದ ಶಾಲಾ-ಕಾಲೇಜು ಸೇರಿದಂತೆ ವಿವಿಧ ಶಿಕ್ಷಣ ಸಂಸ್ಥೆಗಳಿಗೆ ರಜೆ ಸಾರಲಾಗಿದೆ. ಜತೆಗೆ ಸರ್ಕಾರಿ ಉದ್ಯೋಗಿಗಳು ಮತ್ತು ಅಗತ್ಯ ಸೇವೆಗಳನ್ನು ಒದಗಿಸುವ ನೌಕರರನ್ನು ಹೊರತು ಪಡಿಸಿ ಉಳಿದವರೆಲ್ಲ ಮನೆಯಲ್ಲೇ ಕಾರ್ಯ ನಿರ್ವಹಿಸಬೇಕು ಎಂದು ಪ್ರಕಟಣೆ ತಿಳಿಸಿದೆ.

ಇದನ್ನೂ ಓದಿ:Cyclone Remal: ರೆಮಲ್‌ ಚಂಡ ಮಾರುತದ ಅಬ್ಬರ ಶುರು; ಬಾಂಗ್ಲಾದೇಶ, ಪ.ಬಂಗಾಳ ಸೇರಿದಂತೆ ಹಲವಡೆ ಭಾರೀ ಮಳೆ, ಭೂಕುಸಿತ ಸಾಧ್ಯತೆ

ಪಪುವಾ ನ್ಯೂಗಿನಿಯಾದಲ್ಲಿ ಭೂಕುಸಿತ; ಮೃತರ ಸಂಖ್ಯೆ 2,000ಕ್ಕೆ ಏರಿಕೆ

ಪಪುವಾ ನ್ಯೂಗಿನಿಯಾದಲ್ಲಿ ಕಂಡು ಕೇಳರಿಯದ ಭೂಕುಸಿತ ಸಂಭವಿಸಿದ ಬೆನ್ನಿಗೇ ಈ ದುರಂತ ನಡೆದಿದೆ. ನ್ಯೂಗಿನಿಯಾದ ದುರಂತದಲ್ಲಿ ಸಾವಿನ ಸಂಖ್ಯೆ 2,000ಕ್ಕೆ ಏರಿಕೆಯಾಗಿದೆ. ಸಾವಿರಾರು ಜನ ಗಾಯಗೊಂಡಿದ್ದು, ನೂರಾರು ಜನ ಭೂಮಿ ಅವಶೇಷಗಳ ಅಡಿಯಲ್ಲಿ ಹುದುಗಿಹೋಗಿದ್ದಾರೆ. ಸಾವಿರಾರು ಜನರನ್ನು ಸ್ಥಳಾಂತರ ಮಾಡಲಾಗಿದೆ. ಪಪುವಾ ನ್ಯೂಗಿನಿಯಾದಲ್ಲಿ ಇತ್ತೀಚಿನ ದಶಕಗಳಲ್ಲಿ ಸಂಭವಿಸಿದ ಭೀಕರ ದುರಂತ ಇದಾಗಿದೆ ಎಂದು ಹೇಳಲಾಗುತ್ತಿದೆ. ಸದ್ಯ ಭಾರತ ಸೇರಿದಂತೆ ವಿವಿಧ ದೇಶಗಳು ನೆರವಿನ ಹಸ್ತ ಚಾಚಲು ಮುಂದೆ ಬಂದಿವೆ.

ಕಳೆದ ಕೆಲವು ದಿನಗಳಿಂದ ನಿರಂತರವಾಗಿ ಸುರಿಯುತ್ತಿರುವ ಮಳೆಯಿಂದಾಗಿ ಎಲ್ಲೆಂದರಲ್ಲಿ ಭೂಕುಸಿತ, ಪ್ರವಾಹ ಸ್ಥಿತಿ ನಿರ್ಮಾಣವಾಗಿದೆ. ಗುಡ್ಡಗಾಡು ಪ್ರದೇಶವಾಗಿರುವ ಎಂಗಾ ಪ್ರದೇಶದಲ್ಲಿ ಸಂಪೂರ್ಣವಾಗಿ ಭೂಕುಸಿತಕ್ಕೆ ತುತ್ತಾಗಿದೆ. ಸಾವಿನ ಸಂಖ್ಯೆ 2000ಕ್ಕೆ ಏರಿಕೆಯಾಗಿದೆ. 150 ಮನೆಗಳು ಭೂಮಿಯಲ್ಲಿ ಹುದುಗಿಹೋಗಿವೆ. ಮಳೆಯ ನೀರು ಇನ್ನೂ ಹರಿಯುತ್ತಿರುವ ಕಾರಣ ಜನರ ರಕ್ಷಣೆಯು ಕಷ್ಟವಾಗುತ್ತಿದೆ. ಸಾವಿರಾರು ಜನರನ್ನು ಈಗಾಗಲೇ ಸುರಕ್ಷಿತ ಸ್ಥಳಕ್ಕೆ ಸ್ಥಳಾಂತರ ಮಾಡಲಾಗಿದೆ. ಇನ್ನೂ ರಕ್ಷಣಾ ಕಾರ್ಯಾಚರಣೆ ಮುಂದುವರಿದಿದೆ ಎಂದು ವಿಶ್ವಸಂಸ್ಥೆಯು ಮಾಹಿತಿ ನೀಡಿದೆ.

Continue Reading

ದೇಶ

Pune Porsche Accident: ಆರೋಪಿಯ ರಕ್ತದ ಮಾದರಿ ಬದಲಿಸಲು 3 ಲಕ್ಷ ರೂ. ಲಂಚ ಪಡೆದಿದ್ದ ವೈದ್ಯರು; ಆಸ್ಪತ್ರೆ ಜವಾನ ಅರೆಸ್ಟ್‌

Pune Porsche Accident: ಬಾಲಕ ಮದ್ಯ ಸೇವಿಸಿ ಕಾರು ಚಲಾಯಿಸಿದ್ದಾನೆ ಎಂಬುದನ್ನು ತಿಳಿದುಕೊಳ್ಳಲು ಬಾಲಕ ರಕ್ತದ ಪರೀಕ್ಷೆ ನಡೆಸಲಾಗಿತ್ತು. ಈ ವೇಳೆ ಸರ್ಕಾರಿ ವೈದ್ಯರಿಬ್ಬರು ಅದನ್ನು ಬದಲಾಯಿಸಿರುವುದು ಸಾಬೀತಾದ ಹಿನ್ನೆಲೆ ಪೊಲೀಸರು ನಿನ್ನೆ ಪುಣೆಯ ಸಾಸೂನ್‌ ಆಸ್ಪತ್ರೆಯ ಮುಖ್ಯ ವೈದ್ಯಾಧಿಕಾರಿಗಳಾದ ಡಾ. ಅಜಯ್‌ ತಾವರೆ ಮತ್ತು ಡಾ. ಶ್ರೀಹರಿ ಹರ್ನೂರ್‌ನನ್ನು ಅರೆಸ್ಟ್‌ ಮಾಡಿದ್ದರು. ಇದೀಗ ಈ ವೈದ್ಯರು ಬಾಲಕ ಕುಟುಂಬಸ್ಥರಿಂದ 3 ಲಕ್ಷ ರೂ. ಲಂಚ ಪಡೆದಿದ್ದು, ಈ ಹಣವನ್ನು ಜವಾನ ಸಂಗ್ರಹಿಸಿರುವ ವಿಚಾರ ಬೆಳಕಿಗೆ ಬಂದಿದೆ. ಈ ಮೂವರನ್ನು ಮೇ 30ರಂದು ಪೊಲೀಸ್‌ ಕಸ್ಟಡಿಗೆ ಒಪ್ಪಿಸಲಾಗಿದೆ.

VISTARANEWS.COM


on

Pune Porsche Accident
Koo

ಪುಣೆ: ಪುಣೆ ನಗರದಲ್ಲಿ ಐಷಾರಾಮಿ ಪೋರ್ಷೆ ಕಾರನ್ನು (Pune Porsche accident) ಚಲಾಯಿಸಿ ಇಬ್ಬರು ಐಟಿ ವೃತ್ತಿಪರರನ್ನು (IT Engineers) ಸಾಯಿಸಿದ ಪ್ರಕರಣದ ಬಾಲಾಪರಾಧಿ 17 ವರ್ಷದ ಬಾಲಕ (juvenile)ನ ರಕ್ತದ ಮಾದರಿಯನ್ನು ಬದಲಾಯಿಸಲು ವೈದ್ಯರಿಬ್ಬರು 3 ಲಕ್ಷ ರೂ. ಲಂಚ ಪಡೆದಿದ್ದರು ಎನ್ನಲಾಗಿದೆ. ಪ್ರಕರಣಕ್ಕೆ ಸಂಬಂಧಿಸಿದಂತೆ ಇಬ್ಬರು ವೈದ್ಯರನ್ನು ನಿನ್ನೆಯೇ ಬಂಧಿಸಲಾಗಿತ್ತು. ಇದೀಗ ಈ ಕುಕೃತ್ಯಕ್ಕೆ ಸಹಕರಿಸಿದ ಆಸ್ಪತ್ರೆಯ ಜವಾನನ್ನು ಅರೆಸ್ಟ್‌ ಮಾಡಿದ್ದಾರೆ.

ಬಾಲಕ ಮದ್ಯ ಸೇವಿಸಿ ಕಾರು ಚಲಾಯಿಸಿದ್ದಾನೆ ಎಂಬುದನ್ನು ತಿಳಿದುಕೊಳ್ಳಲು ಬಾಲಕ ರಕ್ತದ ಪರೀಕ್ಷೆ ನಡೆಸಲಾಗಿತ್ತು. ಈ ವೇಳೆ ಸರ್ಕಾರಿ ವೈದ್ಯರಿಬ್ಬರು ಅದನ್ನು ಬದಲಾಯಿಸಿರುವುದು ಸಾಬೀತಾದ ಹಿನ್ನೆಲೆ ಪೊಲೀಸರು ನಿನ್ನೆ ಪುಣೆಯ ಸಾಸೂನ್‌ ಆಸ್ಪತ್ರೆಯ ಮುಖ್ಯ ವೈದ್ಯಾಧಿಕಾರಿಗಳಾದ ಡಾ. ಅಜಯ್‌ ತಾವರೆ ಮತ್ತು ಡಾ. ಶ್ರೀಹರಿ ಹರ್ನೂರ್‌ನನ್ನು ಅರೆಸ್ಟ್‌ ಮಾಡಿದ್ದರು. ಇದೀಗ ಈ ವೈದ್ಯರು ಬಾಲಕ ಕುಟುಂಬಸ್ಥರಿಂದ 3 ಲಕ್ಷ ರೂ. ಲಂಚ ಪಡೆದಿದ್ದು, ಈ ಹಣವನ್ನು ಜವಾನ ಸಂಗ್ರಹಿಸಿರುವ ವಿಚಾರ ಬೆಳಕಿಗೆ ಬಂದಿದೆ. ಈ ಮೂವರನ್ನು ಮೇ 30ರಂದು ಪೊಲೀಸ್‌ ಕಸ್ಟಡಿಗೆ ಒಪ್ಪಿಸಲಾಗಿದೆ.

ಈ ಬಗ್ಗೆ ಪುಣೆ ಪೊಲೀಸ್‌ ಕಮಿಷನರ್‌ ಅಮಿತೇಶ್‌ ಕುಮಾರ್‌ ಪ್ರತಿಕ್ರಿಯಿಸಿದ್ದು, ಪುಣೆಯ ಸಾಸೂನ್‌ ಆಸ್ಪತ್ರೆಯ ಮುಖ್ಯ ವೈದ್ಯಾಧಿಕಾರಿಗಳಾದ ಡಾ. ಅಜಯ್‌ ತಾವರೆ ಮತ್ತು ಡಾ. ಶ್ರೀಹರಿ ಹರ್ನೂರ್‌ ಆರೋಪಿಯ ರಕ್ತದ ಮಾದರಿಯನ್ನೇ ಬದಲಿಸಿದ್ದಾರೆ. ಆಮೂಲಕ ಈ ಪ್ರರಕಣದ ದಾರಿ ತಪ್ಪಿಸುವ ಪ್ರಯತ್ನ ಮಾಡಿದ್ದಾರೆ. ಅವರಿಬ್ಬರನ್ನೂ ಇದೀಗ ಬಂಧಿಸಲಾಗಿದೆ ಎಂದು ಹೇಳಿದ್ದಾರೆ. ಇನ್ನು ಈ ಪ್ರರಕಣವನ್ನು ಕ್ರೈಂ ಬ್ರ್ಯಾಂಚ್‌ ಪೊಲೀಸರು ತನಿಖೆ ನಡೆಸುತ್ತಿದ್ದಾರೆ. ಕೆಲವು ದಿನಗಳ ಹಿಂದೆಯಷ್ಟೇ ಪ್ರಕರಣದ ದಾರಿ ತಪ್ಪಿಸಲು ಪ್ರಯತ್ನಿಸಿದ್ದ ಎರವಾಡ ಪೊಲೀಸ್‌ ಠಾಣೆ ಇಬ್ಬರು ಪೊಲೀಸರನ್ನು ಅಮಾನತುಗೊಳಿಸಲಾಗಿತ್ತು.

ಕಳೆದ ಭಾನುವಾರ ಕಲ್ಯಾಣಿನಗರ ಪ್ರದೇಶದಲ್ಲಿ ಬಾರ್‌ನಲ್ಲಿ ಮದ್ಯ ಸೇವಿಸಿ ಪಾನಮತ್ತರಾಗಿದ್ದ 17 ವರ್ಷದ ಬಾಲಕ ಚಾಲನೆ ಮಾಡುತ್ತಿದ್ದ ಪೋರ್ಶೆ ಕಾರು, ಬೈಕ್‌ಗೆ ಡಿಕ್ಕಿ ಹೊಡೆದಿದ್ದು, ಅಪಘಾತದಲ್ಲಿ ಇಬ್ಬರು ಸಾಫ್ಟ್‌ವೇರ್ ಇಂಜಿನಿಯರ್‌ಗಳು ಮೃತಪಟ್ಟಿದ್ದರು. ಇದಾದ ಬಳಿಕ ಪೊಲೀಸರು ಬಾಲಾಪರಾಧಿ ನ್ಯಾಯಾಲಯದ ತೀರ್ಪಿನಂತೆ ಬಾಲಕನನ್ನು ಬಂಧಿಸಿ ಬಳಿಕ ಷರತ್ತುಬದ್ಧ ಜಾಮೀನಿನ ಮೇಲೆ ಬಿಡುಗಡೆ ಮಾಡಿದ್ದರು. ಬಳಿಕ ತಂದೆ ವಿಶಾಲ್​ ಅಗರ್ವಾಲ್​ರನ್ನು ಬಂಧಿಸಿದ್ದರು.

ಎಲ್ಲೆಡೆ ಪೊಲೀಸರ ನಿರ್ಧಾರಕ್ಕೆ ವಿರೋಧ ವ್ಯಕ್ತವಾದ ಹಿನ್ನೆಲೆಯಲ್ಲಿ ಜಾಮೀನನ್ನು ರದ್ದುಗೊಳಿಸಿ ಮತ್ತೆ ಬಂಧಿಸಲಾಗಿತ್ತು. ಮೊದಲು ವಿಶಾಲ್ ಅಗರ್ವಾಲ್​ ನನ್ನ ಮಗ ಕಾರು ಓಡಿಸುತ್ತಿರಲಿಲ್ಲ ಕಾರಿಗೆ ಬೇರೆ ಡ್ರೈವರ್​ ಇದ್ದಾರೆ ಎಂದು ಹೇಳಿದ್ದರು. ಇನ್ನು ಬಾಲಕ ಮದ್ಯಪಾನ ಮಾಡಿ ವಾಹನ ಚಲಾಯಿಸಿರುವ ಶಂಕೆ ವ್ಯಕ್ತವಾಗಿತ್ತು. ಇದಕ್ಕೆ ಪೂರಕ ಎಂಬಂತೆ ಘಟನೆಗೂ ಮುನ್ನ ಆತ ಸ್ನೇಹಿತರ ಜೊತೆಗೂಡಿ ಬಾರ್‌ನಲ್ಲಿ ಕುಡಿಯುತ್ತಿರುವ ದೃಶ್ಯ ಸಿಸಿಟಿವಿಯಲ್ಲಿ ಸೆರೆ ಆಗಿತ್ತು. ಹೀಗಾಗಿ ಆತನ ರಕ್ತದ ಮಾದರಿಯನ್ನು ಪರೀಕ್ಷೆಗೆ ಕಳಿಹಿಸಲಾಗಿತ್ತು. ಇದೆಲ್ಲಾ ನಡೆದ ಬಳಿಕ ಆತ ಮದ್ಯಪಾನ ಮಾಡಿರಲಿಲ್ಲ ಎನ್ನುವ ವರದಿ ಆಸ್ಪತ್ರೆಯಿಂದ ಹೊರಬಿದ್ದಿತ್ತು. ಇದೀಗ ವೈದ್ಯರು ದುಡ್ಡಿನ ಆಸೆಗೆ ಬಿದ್ದು ಬಾಲಕನ ರಕ್ತದ ಮಾದರಿಯನ್ನು ಬದಲಾಯಿಸಿದ್ದಾರೆ ಎನ್ನುವುದನ್ನು ಅರಿತ ಪೊಲೀಸರು ರಕ್ತದ ಮಾದರಿಯನ್ನು ತಿರುಚಿದ ಆರೋಪದ ಮೇಲೆ ಇಬ್ಬರು ವೈದ್ಯರನ್ನು ಬಂಧಿಸಿದ್ದಾರೆ.

ಮೂರು ದಿನಗಳ ಹಿಂದೆಯಷ್ಟೇ ಕಾರು ಚಾಲಕನನ್ನು ಅಕ್ರಮವಾಗಿ ಮನೆಯಲ್ಲಿ ಕೂಡಿ ಹಾಕಿದ್ದಕ್ಕಾಗಿ ಆರೋಪಿ ಬಾಲಕನ ಅಜ್ಜನನ್ನು ಬಂಧಿಸಲಾಗಿತ್ತು. ಕುಟುಂಬದ ಚಾಲಕನನ್ನು ಅಕ್ರಮವಾಗಿ ಬಂಧನದಲ್ಲಿ ಇರಿಸಿಕೊಂಡು, ಅಪಘಾತದ ಹೊಣೆ ಹೊತ್ತುಕೊಳ್ಳುವಂತೆ ಆತನಿಗೆ ಬೆದರಿಕೆ ಹಾಕಿದ ಆರೋಪದಲ್ಲಿ ಬಾಲಕನ ಅಜ್ಜ ಸುರೇಂದ್ರ ಕುಮಾರ್ ಅಗರವಾಲ್ ಅವರನ್ನು ಬಂಧಿಸಲಾಗಿದೆ. ಅಜ್ಜನ ವಿರುದ್ಧ ಪೊಲೀಸರು ಅಪಹರಣ ಮತ್ತು ಅಕ್ರಮ ಬಂಧನದ ಆರೋಪದಲ್ಲಿ ಐಪಿಸಿ ಸೆಕ್ಷನ್‌ಗಳ ಅಡಿ ಪ್ರಕರಣ ದಾಖಲಿಸಿದ್ದಾರೆ. ಈ ಪ್ರಕರಣದಲ್ಲಿ ಬಾಲಕನ ತಂದೆ ವಿಶಾಲ್ ಅಗರ್ವಾಲ್ ಅವರ ಹೆಸರೂ ಇದೆ ಎಂದು ಅಧಿಕಾರಿ ತಿಳಿಸಿದ್ದಾರೆ.

ಇದನ್ನೂ ಓದಿ:Karnataka Congress: ಈ ದೇಶವನ್ನು ಅಭಿವೃದ್ಧಿಗೊಳಿಸಿದ್ದು ನೆಹರೂ ಹೊರತು ಮೋದಿಯಲ್ಲ: ಸಿದ್ದರಾಮಯ್ಯ ಪ್ರತಿಪಾದನೆ

ಬಾಲಕನ ಅಜ್ಜ ಮತ್ತು ತಂದೆ ಇಬ್ಬರೂ ಚಾಲಕನ ಫೋನ್ ಕಿತ್ತುಕೊಂಡಿದ್ದರು. ತಮ್ಮ ಬಂಗಲೆ ಆವರಣದಲ್ಲಿ ಇರುವ ಆತನ ಮನೆಯಲ್ಲಿ ಮೇ 19 ಮತ್ತು 20ರಂದು ಆತನನ್ನು ಕೂಡಿ ಹಾಕಿದ್ದರು. ಚಾಲಕನನ್ನು ಆತನ ಪತ್ನಿ ಬಂಧ ಮುಕ್ತಗೊಳಿಸಿದ್ದಳು” ಎಂದು ಅಧಿಕಾರಿಯೊಬ್ಬರು ತಿಳಿಸಿದ್ದಾರೆ.

Continue Reading

ಉದ್ಯೋಗ

Job Alert: ಬಂಧನ್‌ ಬ್ಯಾಂಕ್‌ನಲ್ಲಿದೆ ಉದ್ಯೋಗಾವಕಾಶ; ಅಪ್ಲೈ ಮಾಡಲು ಮೇ 31 ಕೊನೆಯ ದಿನ

Job Alert: ಭಾರತದ ಪ್ರಮುಖ ಖಾಸಗಿ ವಲಯದ ಬ್ಯಾಂಕ್‌ಗಳಲ್ಲಿ ಒಂದಾದ ಬಂಧನ್‌ ಬ್ಯಾಂಕ್‌ ದೇಶಾದ್ಯಂತ ಖಾಲಿ ಇರುವ 31 ಬ್ಯಾಂಕ್ ಸಹಾಯಕ ಹುದ್ದೆಗಳಿಗೆ ಅರ್ಜಿಗಳನ್ನು ಆಹ್ವಾನಿಸಿದೆ. 12ನೇ ತರಗತಿ ತೇರ್ಗಡೆ ಹೊಂದಿದವರು ಮತ್ತು ತತ್ಸಮಾನ ವಿದ್ಯಾರ್ಹತೆ ಹೊಂದಿರುವವರು ಆನ್‌ಲೈನ್‌ ಮೂಲಕ ಅರ್ಜಿ ಸಲ್ಲಿಸಬೇಕು. ಅರ್ಜಿ ಸಲ್ಲಿಕೆಗೆ ಮೇ 31 ಕೊನೆಯ ದಿನ. ಅಭ್ಯರ್ಥಿಗಳು ಕಂಪ್ಯೂಟರ್‌ ಜ್ಞಾನ ಹೊಂದಿರುವುದು ಕಡ್ಡಾಯ.

VISTARANEWS.COM


on

Job Alert
Koo

ಬೆಂಗಳೂರು: ಬ್ಯಾಂಕ್‌ ಉದ್ಯೋಗಕ್ಕಾಗಿ(Bank Job) ಹುಡುಕಾಟ ನಡೆಸುತ್ತಿದ್ದೀರಾ? ಹಾಗಾದರೆ ಇಲ್ಲಿದೆ ಗೋಲ್ಡನ್‌ ಚಾನ್ಸ್‌. ಭಾರತದ ಪ್ರಮುಖ ಖಾಸಗಿ ವಲಯದ ಬ್ಯಾಂಕ್‌ಗಳಲ್ಲಿ ಒಂದಾದ ಬಂಧನ್‌ ಬ್ಯಾಂಕ್‌ (Bandhan Bank) ದೇಶಾದ್ಯಂತ ಖಾಲಿ ಇರುವ 31 ಬ್ಯಾಂಕ್ ಸಹಾಯಕ ಹುದ್ದೆಗಳಿಗೆ ಅರ್ಜಿಗಳನ್ನು ಆಹ್ವಾನಿಸಿದೆ (Bandhan Bank Assistant Notification 2024). 12ನೇ ತರಗತಿ ತೇರ್ಗಡೆ ಹೊಂದಿದವರು ಮತ್ತು ತತ್ಸಮಾನ ವಿದ್ಯಾರ್ಹತೆ ಹೊಂದಿರುವವರು ಆನ್‌ಲೈನ್‌ ಮೂಲಕ ಅರ್ಜಿ ಸಲ್ಲಿಸಬೇಕು. ಅರ್ಜಿ ಸಲ್ಲಿಕೆಗೆ ಮೇ 31 ಕೊನೆಯ ದಿನ (Job Alert).

ವಿದ್ಯಾರ್ಹತೆ ಮತ್ತು ವಯೋಮಿತಿ

ದ್ವಿತೀಯ ಪಿಯುಸಿ ಪಾಸಾದವರು, ಪದವಿ ಪಡೆದವರು ಮತ್ತು ತತ್ಸಮಾನ ವಿದ್ಯಾರ್ಹತೆ ಹೊಂದಿದರವರು ಅರ್ಜಿ ಸಲ್ಲಿಬಹುದು. ಅಭ್ಯರ್ಥಿಗಳು ಕಂಪ್ಯೂಟರ್‌ ಜ್ಞಾನ ಹೊಂದಿರುವುದು ಕಡ್ಡಾಯ. ಅಭ್ಯರ್ಥಿಗಳ ಕನಿಷ್ಠ ವಯಸ್ಸು 18 ವರ್ಷ ಮತ್ತು ಗರಿಷ್ಠ ವಯಸ್ಸು 30 ವರ್ಷ. ಅಂದರೆ ಅಭ್ಯರ್ಥಿಗಳು 1994ರ ಏಪ್ರಿಲ್‌ 3 ಮತ್ತು 2006ರ ಏಪ್ರಿಲ್‌ 3ರೊಳಗೆ ಜನಿಸಿರಬೇಕು. ಮೀಸಲಾತಿಗೆ ಅನುಗುಣವಾಗಿ ವಯೋಮಿತಿಯಲ್ಲಿ ಸಡಿಲಿಕೆ ಲಭ್ಯ. ಎಸ್‌ಸಿ / ಎಸ್‌ಟಿ ಅಭ್ಯರ್ಥಿಗಳಿಗೆ 5 ವರ್ಷ ಮತ್ತು ಒಬಿಸಿ ಅಭ್ಯರ್ಥಿಗಳಿಗೆ 3 ವರ್ಷಗಳ ರಿಯಾಯಿತಿ ಇದೆ.

ಆಯ್ಕೆ ವಿಧಾನ ಮತ್ತು ಅರ್ಜಿ ಶುಲ್ಕ

ಸಂದರ್ಶನ, ದಾಖಲಾತಿ ಪರಿಶೀಲನೆ, ವೈದ್ಯಕೀಯ ಪರೀಕ್ಷೆ ಮೂಲಕ ಅಭ್ಯರ್ಥಿಗಳ ಆಯ್ಕೆ ನಡೆಯಲಿದೆ. ಆನ್‌ಲೈನ್‌ ಮೂಲಕ ಸಂದರ್ಶನ ನಡೆಯಲಿದೆ. ಯಾವುದೇ ಅಭ್ಯರ್ಥಿಗಳು ಅರ್ಜಿ ಶುಲ್ಕ ಪಾವತಿಸಬೇಕಾಗಿಲ್ಲ.

ಕಾರ್ಯ ವೈಖರಿ

ಆಯ್ಕೆಯಾಗುವ ಉದ್ಯೋಗಿಗಳು ಗ್ರಾಹಕರ ಖಾತೆಗಳನ್ನು ನಿರ್ವಹಿಸುವುದು, ಹಣ ವರ್ಗಾವಣೆಗಳು ಮತ್ತು ಠೇವಣಿಗಳನ್ನು ಪ್ರಕ್ರಿಯೆ ನಡೆಸುವುದು, ಡ್ರಾಫ್ಟ್‌ ಮತ್ತು ಚೆಕ್‌ ನೀಡುವುದು, ಲಾಕರ್‌ಗಳ ನಿರ್ವಹಣೆ, ಗ್ರಾಹಕರ ಪ್ರಶ್ನೆಗಳಿಗೆ ಉತ್ತರ ನೀಡುವುದು ಮತ್ತು ಸಮಸ್ಯೆಗಳನ್ನು ಪರಿಹರಿಸುವುದು, ಬ್ಯಾಂಕಿನ ನಿಯಮಗಳು ಮತ್ತು ನಿಬಂಧನೆಗಳನ್ನು ಅನುಸರಿಸುವುದು, ಕ್ಯಾಶ್ ನಿರ್ವಹಣೆ ಮುಂತಾದ ಜವಾಬ್ದಾರಿ ನಿರ್ವಹಿಸಬೇಕಾಗುತ್ತದೆ. ಉದ್ಯೋಗದ ಸ್ಥಳ: ಭಾರತಾದ್ಯಂತ.

ಬ್ಯಾಂಕ್‌ ಬಗ್ಗೆ

ಕೋಲ್ಕತ್ತಾದಲ್ಲಿ ಕೇಂದ್ರ ಕಚೇರಿ ಹೊಂದಿರುವ ಬಂಧನ್‌ ಬ್ಯಾಂಕ್‌ ದೇಶದ 34 ರಾಜ್ಯ ಮತ್ತು ಕೇಂದ್ರಾಡಳಿತ ಪ್ರದೇಶಗಳಲ್ಲಿ ಶಾಖೆಗಳನ್ನು ಹೊಂದಿದೆ. ಬ್ಯಾಂಕ್‌ಗೆ ಸುಮಾರು 2.51 ಕೋಟಿ ಗ್ರಾಹಕರಿದ್ದಾರೆ.

Bandhan Bankನ ಸಹಾಯಕ ಹುದ್ದೆಗಳ ಅಧಿಸೂಚನೆಗಾಗಿ ಇಲ್ಲಿ ಕ್ಲಿಕ್‌ ಮಾಡಿ.

ಅರ್ಜಿ ಸಲ್ಲಿಸುವ ವಿಧಾನ

  • ಅರ್ಜಿ ಸಲ್ಲಿಸಲು ಇಲ್ಲಿ ಕ್ಲಿಕ್‌ ಮಾಡಿ.
  • ಮೊದಲು ನಿಮ್ಮ ಹೆಸರು ನೋಂದಾಯಿಸಿ.
  • ಈಗ ಕಂಡುಬರುವ ಪಾಸ್‌ವರ್ಡ್‌ ಬಳಸಿ ಲಾಗಿನ್‌ ಆಗಿ.
  • ಅಪ್ಲಿಕೇಷನ್‌ ಫಾರಂ ಭರ್ತಿ ಮಾಡಿ.
  • ಅಗತ್ಯ ಡಾಕ್ಯುಮೆಂಟ್‌, ಸಹಿ, ಫೋಟೊ ಅಪ್‌ಲೋಡ್‌ ಮಾಡಿ.
  • ವಿವರಗಳನ್ನು ಮತ್ತೊಮ್ಮೆ ಪರಿಶೀಲಿಸಿ ಎಲ್ಲವೂ ಸರಿಯಿದ್ದರೆ Submit ಬಟನ್‌ ಕ್ಲಿಕ್‌ ಮಾಡಿ.

ಹೆಚ್ಚಿನ ವಿವರಗಳಿಗೆ ಎಚ್‌ಆರ್‌ ವಿಭಾಗದ ಫೋನ್‌ ನಂಬರ್‌: 7501496783 ಅಥವಾ ಇಮೇಲ್‌ hrraj.bankingofficial@gmail.com ಅನ್ನು ಸಂಪರ್ಕಿಸಿ.

ಇದನ್ನೂ ಓದಿ: KPTCL Recruitment: 902 ಹುದ್ದೆಗಳ ನೇಮಕಾತಿಗೆ ಕೆಪಿಟಿಸಿಎಲ್‌ ಆದೇಶ

Continue Reading
Advertisement
Road Accident in Anekal
ಕ್ರೈಂ15 mins ago

Road Accident : ತಿರುವಿನಲ್ಲಿದ್ದ ಜವರಾಯ; ಸ್ಪೀಡಾಗಿ ಬಂದು ಫೆನ್ಸಿಂಗ್ ಕಂಬಕ್ಕೆ ಡಿಕ್ಕಿ, ಬೈಕ್‌ ಸವಾರ ಸಾವು

T20 World Cup 2024
ಕ್ರೀಡೆ16 mins ago

T20 World Cup 2024: ಟಿ20 ವಿಶ್ವಕಪ್​ ಇತಿಹಾಸದಲ್ಲಿ ಎಂದೂ ಮರೆಯದ ಸ್ಮರಣೀಯ ಸನ್ನಿವೇಶಗಳಿವು

Human trafficking
ದೇಶ25 mins ago

Human trafficking Case: ದೇಶಾದ್ಯಂತ NIA ರೇಡ್‌; ಮಾನವ ಕಳ್ಳಸಾಗಣೆ ಜಾಲ ಬಯಲು

Stone Quarry Collapses
ದೇಶ30 mins ago

Stone Quarry Collapses: ಕಲ್ಲಿನ ಗಣಿ ಕುಸಿದು 10 ಮಂದಿ ಜೀವಂತ ಸಮಾಧಿ; ರಕ್ಷಣಾ ಕಾರ್ಯಾಚರಣೆಗೆ ಭೀಕರ ಮಳೆ ಅಡ್ಡಿ

tumkur murder
ತುಮಕೂರು44 mins ago

Tumkur Murder : ಮಗುವಿನ ಮುಂದೆಯೇ ಹೆಂಡತಿಯ ಕತ್ತು, ದೇಹವನ್ನು ಕತ್ತರಿಸಿ ಬಿಸಾಡಿದ ದುಷ್ಟ

deep fake case
ಕ್ರೈಂ1 hour ago

Deepfake Case: ವಿದ್ಯಾರ್ಥಿನಿಯ ಡೀಪ್‌ ಫೇಕ್‌ ಫೋಟೋ ಸೃಷ್ಟಿ ಮಾಡಿದ ಅದೇ ಶಾಲೆಯ 2 ಹುಡುಗರು ಡಿಬಾರ್

Rashmika Mandanna
South Cinema1 hour ago

Rashmika Mandanna: ವಿಜಯ್‌ ದೇವರಕೊಂಡ ಹೆಸರು ಕೇಳುತ್ತಲೇ ನಾಚಿ ನೀರಾದ ರಶ್ಮಿಕಾ; ಸದ್ಯದಲ್ಲೇ ಗುಡ್‌ನ್ಯೂಸ್‌?

T20 World Cup 2024
ಕ್ರೀಡೆ1 hour ago

T20 World Cup 2024: ಟಿ20 ವಿಶ್ವ ಕಪ್​ನಲ್ಲಿ ಟೀಮ್​ ಇಂಡಿಯಾದ ಮುಂದಿರುವ ಸವಾಲುಗಳೇನು?

murder case belagavi news
ಕ್ರೈಂ2 hours ago

Murder Case: ಎಮ್ಮೆ ಮಾರಿ ಬಂದ ಕಾಸಿನಿಂದ ಕುಡಿದ; ಆಕ್ಷೇಪಿಸಿದ ಹೆಂಡತಿಯ ಕೊಂದು ನೇಣು ಹಾಕಿಕೊಂಡ

Pune Porsche Accident
ದೇಶ2 hours ago

Pune Porsche Accident: ಆರೋಪಿಯ ರಕ್ತದ ಮಾದರಿ ಬದಲಿಸಲು 3 ಲಕ್ಷ ರೂ. ಲಂಚ ಪಡೆದಿದ್ದ ವೈದ್ಯರು; ಆಸ್ಪತ್ರೆ ಜವಾನ ಅರೆಸ್ಟ್‌

Sharmitha Gowda in bikini
ಕಿರುತೆರೆ8 months ago

Geetha Serial Kannada: ನಿದ್ದೆ ಕದ್ದ ಚೋರಿ! ನಟಿ `ಭಾನುಮತಿ’ ಹಾಟ್‌ ಪೋಟೊಗಳಿಗೆ ಫ್ಯಾನ್ಸ್ ಫುಲ್ ಫಿದಾ

Kannada Serials
ಕಿರುತೆರೆ8 months ago

Kannada Serials TRP: 2ನೇ ಸ್ಥಾನದಲ್ಲಿ 2 ಧಾರಾವಾಹಿಗಳು; ಟಿಆರ್‌ಪಿ ರೇಸ್‌ನಲ್ಲಿಲ್ಲ ಭಾಗ್ಯಲಕ್ಷ್ಮೀ!

Bigg Boss- Saregamapa 20 average TRP
ಕಿರುತೆರೆ7 months ago

Kannada Serials TRP: ಏಳನೇ ಸ್ಥಾನಕ್ಕೆ ʻಅಮೃತಧಾರೆʼ ಕುಸಿತ; ಬಿಗ್‌ ಬಾಸ್‌-ಸರಿಗಮಪ ಟಿಆರ್‌ಪಿ ಎಷ್ಟು?

galipata neetu
ಕಿರುತೆರೆ6 months ago

Kanyadana Serial: ಕಿರುತೆರೆಗೆ ಮತ್ತೆ ಎಂಟ್ರಿ ಕೊಟ್ಟ ʻಗಾಳಿಪಟʼ ಖ್ಯಾತಿಯ ʻನೀತುʼ!

Kannada Serials
ಕಿರುತೆರೆ8 months ago

Kannada Serials TRP: ನಾಲ್ಕನೇ ಸ್ಥಾನಕ್ಕೆ ಕುಸಿತ ಕಂಡ ʻಸೀತಾ ರಾಮʼ; ಟಿಆರ್‌ಪಿ ರೇಸ್‌ಗೆ ʻಭಾಗ್ಯಲಕ್ಷ್ಮಿʼ ಬ್ಯಾಕ್‌!

Kannada Serials
ಕಿರುತೆರೆ8 months ago

Kannada Serials TRP: ಟಿಆರ್‌ಪಿಯಲ್ಲಿ ʻಭಾಗ್ಯಲಕ್ಷ್ಮೀʼ ಹವಾ; ʻಪುಟ್ಟಕ್ಕನ ಮಕ್ಕಳುʼ ಧಾರಾವಾಹಿಗೆ ಸಂಕಷ್ಟ!

Bigg Boss' dominates TRP; Sita Rama fell to the sixth position
ಕಿರುತೆರೆ7 months ago

Kannada Serials TRP: ಟಿಆರ್‌ಪಿಯಲ್ಲಿ ʻಬಿಗ್ ಬಾಸ್ʼದೇ ಮೇಲುಗೈ; 6ನೇ ಸ್ಥಾನಕ್ಕೆ ಕುಸಿದ ʻಸೀತಾ ರಾಮʼ

geetha serial Dhanush gowda engagement
ಕಿರುತೆರೆ5 months ago

Dhanush Gowda: ಗೀತಾ ಧಾರಾವಾಹಿ ನಟನ ನಿಶ್ಚಿತಾರ್ಥ; ಭವ್ಯಾಳ ಕಮೆಂಟ್‌ ಬಾಕ್ಸ್‌ ಆಫ್‌!

varun
ಕಿರುತೆರೆ6 months ago

Brindavana Serial: ʼಬೃಂದಾವನʼ ಧಾರಾವಾಹಿಯಲ್ಲಿ ದೊಡ್ಡ ಟ್ವಿಸ್ಟ್‌; ಪ್ರಮುಖ ಪಾತ್ರಧಾರಿಯೇ ಬದಲು

Kannada Serials
ಕಿರುತೆರೆ9 months ago

Kannada Serials TRP: ಟಿಆರ್‌ಪಿಯಲ್ಲಿ ಏರಿಕೆ ಕಂಡ ʻಅಮೃತಧಾರೆʼ; ʻಗಟ್ಟಿಮೇಳʼಕ್ಕೆ ನಾಲ್ಕನೇ ಸ್ಥಾನ!

Karnataka Weather Forecast
ಮಳೆ18 hours ago

Karnataka Weather : ಕಡಲತೀರದಲ್ಲಿ ಅಲೆಗಳ ಅಬ್ಬರ, ಪ್ರವಾಸಿಗರಿಗೆ ಕಟ್ಟೆಚ್ಚರ; ನಾಳೆಯೂ ಗಾಳಿ ಸಹಿತ ಮಳೆ ಅಬ್ಬರ

Karnataka Rain
ಮಳೆ2 days ago

Karnataka Rain : ಯಾದಗಿರಿಯಲ್ಲಿ ಬಿರುಗಾಳಿ ಸಹಿತ ಮಳೆ; ಸಿಡಿಲು ಬಡಿದು ಎಮ್ಮೆಗಳು ಸಾವು

Basavanagudi News
ಬೆಂಗಳೂರು2 days ago

Basavanagudi News : ಪೂಜಾ ಸಾಮಗ್ರಿಗೆ ಒನ್‌ ಟು ಡಬಲ್‌ ರೇಟ್‌; ದೊಡ್ಡ ಗಣಪತಿ ದೇಗುಲದಲ್ಲಿ ಕೈ ಕೈ ಮಿಲಾಯಿಸಿದ ಭಕ್ತರು-ವ್ಯಾಪಾರಿಗಳು

Karnataka Rain
ಮಳೆ3 days ago

Karnataka Rain : ಭಾರಿ ಮಳೆಗೆ ರಸ್ತೆ ಕಾಣದೆ ರಾಜಕಾಲುವೆಗೆ ಉರುಳಿದ ಆಟೋ; ಚಾಲಕ ಸ್ಥಳದಲ್ಲೇ ಸಾವು

dina bhavishya read your daily horoscope predictions for May 23 2024
ಭವಿಷ್ಯ5 days ago

Dina Bhavishya : 12 ರಾಶಿಯವರ ಇಂದಿನ ಭವಿಷ್ಯ ಹೇಗಿದೆ? ಯಾರಿಗೆ ಶುಭ, ಯಾರಿಗೆ ಅಶುಭ ಫಲ?

Karnataka Weather Forecast
ಮಳೆ6 days ago

Karnataka Weather : ಮುಂದುವರಿಯಲಿದೆ ವರುಣಾರ್ಭಟ; ಬೆಂಗಳೂರಲ್ಲೂ ಭಾರಿ ಮಳೆ ನಿರೀಕ್ಷೆ!

Karnataka Rain
ಮಳೆ7 days ago

Karnataka Rain : ಭಾರಿ ಮಳೆಗೆ ಕರೆಂಟ್‌ ಕಟ್‌, ಕತ್ತಲಲ್ಲೇ ರೋಗಿಗಳಿಗೆ ಟ್ರೀಟ್‌ಮೆಂಟ್‌; ಮರ ಬಿದ್ದರೂ ಪಾರಾದ ತಾಯಿ-ಮಗ

Love Case Father throws hot water on man who loved his daughter for coming home
ಕೊಡಗು7 days ago

Love Case : ಮನೆಗೆ ಬಂದ ಪ್ರೇಮಿಗೆ ಕೊತ ಕೊತ ಕುದಿಯುವ ನೀರು ಎರಚಿದ ಯುವತಿ ತಂದೆ!

Contaminated Water
ಮೈಸೂರು7 days ago

Contaminated Water : ಡಿ ಸಾಲುಂಡಿಯಲ್ಲಿ ಕಲುಷಿತ ನೀರು ಸೇವಿಸಿ ಅಸ್ವಸ್ಥಗೊಂಡಿದ್ದ ಯುವಕ ಸಾವು

Karnataka Rain
ಮಳೆ1 week ago

Karnataka Rain : ಬಂಗಾಳ ಕೊಲ್ಲಿಯಲ್ಲಿ ವಾಯುಭಾರ ಕುಸಿತ; ಸಮುದ್ರಕ್ಕಿಳಿಯದಂತೆ ಮೀನುಗಾರರಿಗೆ ಎಚ್ಚರಿಕೆ

ಟ್ರೆಂಡಿಂಗ್‌