Viral Video : ಕತ್ತಲೆ ತುಂಬಿದ ಮನೆಗೆ ಬೆಳಕು ತಂದ ಐಪಿಎಸ್‌ ಅಧಿಕಾರಿ! - Vistara News

ವೈರಲ್ ನ್ಯೂಸ್

Viral Video : ಕತ್ತಲೆ ತುಂಬಿದ ಮನೆಗೆ ಬೆಳಕು ತಂದ ಐಪಿಎಸ್‌ ಅಧಿಕಾರಿ!

ಉತ್ತರ ಪ್ರದೇಶದ ಹಳ್ಳಿಯೊಂದರಲ್ಲಿ ವಿದ್ಯುತ್‌ ಇಲ್ಲದೆ ಬದುಕಿದ್ದ ವೃದ್ಧೆಯ ಮನೆಗೆ ಐಪಿಎಸ್‌ ಅಧಿಕಾರಿಯೊಬ್ಬರು ವಿದ್ಯುತ್‌ ಸಂಪರ್ಕ ಕಲ್ಪಿಸಿಕೊಟ್ಟಿದ್ದಾರೆ. ಅದರ ವಿಡಿಯೊ ಎಲ್ಲೆಡೆ ವೈರಲ್‌ (Viral Video) ಆಗಿದೆ.

VISTARANEWS.COM


on

woman in UP finally gets electricity
ಮಹತ್ವದ, ಕುತೂಹಲಕರ ಸುದ್ದಿಗಾಗಿ ಫಾಲೊ ಮಾಡಿ
Koo

ಲಕ್ನೋ: ಸ್ವಾತಂತ್ರ್ಯ ಬಂದು ಇಷ್ಟು ವರ್ಷಗಳು ಕಳೆದರೂ ಇಂದಿಗೂ ಕೆಲವು ಕುಗ್ರಾಮಗಳಲ್ಲಿ ವಿದ್ಯುತ್‌ ಪರಿಚಯವೇ ಇಲ್ಲದೆ ಜನರು ಬದುಕುತ್ತಿದ್ದಾರೆ. ಅದೇ ರೀತಿ ವಿದ್ಯುತ್‌ ಇಲ್ಲದೆಯೇ ಜೀವನ ಕಳೆಯುತ್ತಿದ್ದ ವಯೋವೃದ್ಧೆಗೆ ಐಪಿಎಸ್‌ ಅಧಿಕಾರಿಯೊಬ್ಬರು ವಿದ್ಯುತ್‌ ಸಂಪರ್ಕ ಕಲ್ಪಿಸಿಕೊಟ್ಟಿದ್ದಾರೆ. ಅದರ ವಿಡಿಯೊ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್‌ (Viral Video) ಆಗಿದೆ.

ಉತ್ತರ ಪ್ರದೇಶದ ಬುಲಂದ್‌ಶಹರ್‌ನ ನೂರ್ಜಹಾನ್‌ ಹೆಸರಿನ ವೃದ್ಧೆ ಈವರೆಗೂ ವಿದ್ಯುತ್‌ ಅನ್ನೇ ನೋಡಿರಲಿಲ್ಲ. ಇದನ್ನು ಗಮನಿಸಿದ ಐಪಿಎಸ್‌ ಅಧಿಕಾರಿ ಅನುಕೃತಿ ಶರ್ಮಾ ಅವರು ಈ ಬಗ್ಗೆ ವಿದ್ಯುತ್‌ ಇಲಾಖೆಯೊಂದಿಗೆ ಮಾತನಾಡಿದ್ದಾರೆ. ವಿದ್ಯುತ್‌ ಸಂಪರ್ಕಕ್ಕೆ ಬೇಕಾದ ವ್ಯವಸ್ಥೆಗಳನ್ನೆಲ್ಲ ಮಾಡಿಸಿ, ನೂರ್‌ಜಹಾನ್‌ ಅವರ ಮನೆಗೆ ವಿದ್ಯುತ್‌ ಸಂಪರ್ಕ ಕಲ್ಪಿಸಿಕೊಟ್ಟಿದ್ದಾರೆ.

ಇದನ್ನೂ ಓದಿ: Viral Video : ಇದು ಟಾಯ್ಲೆಟ್ಟೋ ಅಕ್ವೇರಿಯಮ್ಮೋ? ವಿಚಿತ್ರವಾಗಿದೆ ಈ ವಿಡಿಯೊ!
ನೂರ್ಜಹಾನ್‌ ಅವರ ಮನೆಗೆ ಮೀಟರ್‌ ಬೋರ್ಡ್‌ ಹಾಕುವುದು, ಅವರ ಮನೆಯಲ್ಲಿ ಮೊದಲನೇ ಬಾರಿಗೆ ಬಲ್ಬ್‌ ಬೆಳಗುವುದು ಮತ್ತು ಫ್ಯಾನ್‌ ತಿರುಗುವ ಎಲ್ಲ ಚಿತ್ರಣಗಳನ್ನು ವಿಡಿಯೊ ಮಾಡಲಾಗಿದೆ. ಅದರಲ್ಲಿ ನೂರ್ಜಹಾನ್‌ ಅವರ ಸಂತಸವನ್ನು ಕಾಣಬಹುದಾಗಿದೆ. ಈ ವಿಡಿಯೊವನ್ನು ಅನುಕೃತಿ ಅವರು ತಮ್ಮ ಟ್ವಿಟರ್‌ ಖಾತೆಯಲ್ಲಿ ಹಂಚಿಕೊಂಡಿದ್ದು, “ಇದು ನನ್ನ ಜೀವನದ ಅತ್ಯಂತ ಸಾರ್ಥಕತೆಯ ಕ್ಷಣ. ನೂರ್ಜಹಾನ್‌ ಅವತರ ಮನೆಗೆ ವಿದ್ಯುತ್‌ ಸಂಪರ್ಕ ಕಲ್ಪಿಸಿದ್ದು ಅವರ ಬದುಕಿಗೆ ಬೆಳಕು ತಂದಂತಾಯಿತು. ಅವರ ಮುಖದ ಮೇಲಿನ ನಗು ನಮಗೆ ತೃಪ್ತಿ ತಂದಿದೆ. ಇದಕ್ಕೆ ಬೆಂಬಲಿಸಿದ ಎಲ್ಲರಿಗೂ ಧನ್ಯವಾದಗಳು” ಎಂದು ಹೇಳಿದ್ದಾರೆ.


ಅನುಕೃತಿ ಅವರ ಈ ಟ್ವೀಟ್‌ ಸಾಮಾಜಿಕ ಜಾಲತಾಣಗಳ ತುಂಬೆಲ್ಲ ಭಾರೀ ಸದ್ದು ಮಾಡುತ್ತಿದೆ. ಬಡ ವೃದ್ಧೆಯೊಬ್ಬರ ಬದುಕಲ್ಲಿ ಬೆಳಕಾದ ಐಪಿಎಸ್‌ ಅಧಿಕಾರಿಗೆ ಎಲ್ಲರೂ ಧನ್ಯವಾದಗಳನ್ನು ಹೇಳಲಾರಂಭಿಸಿದ್ದಾರೆ. “ನಿಜಕ್ಕೂ ನಿಮ್ಮಂತಹ ಅಧಿಕಾರಿಗಳು ನಮ್ಮ ದೇಶಕ್ಕೆ ಬೇಕಾಗಿದ್ದಾರೆ” ಎಂದು ಜನರು ಮೆಚ್ಚುಗೆಯ ಮಾತುಗಳನ್ನು ಕಾಮೆಂಟ್‌ಗಳಲ್ಲಿ ತಿಳಿಸಲಾರಂಭಿಸಿದ್ದಾರೆ.

ಕ್ಷಣ ಕ್ಷಣದ ಮಾಹಿತಿಗಾಗಿ Vistara News FaceBook ಪೇಜ್ ಫಾಲೋ ಮಾಡಿ
ಮಹತ್ವದ ಮಾಹಿತಿಗಾಗಿ ವಿಸ್ತಾರ ನ್ಯೂಸ್ ಆ್ಯಪ್ ಉಚಿತವಾಗಿ ಡೌನ್ ಲೋಡ್ ಮಾಡಿಕೊಳ್ಳಿ: Andriod App | IOS App
Continue Reading
Click to comment

Leave a Reply

Your email address will not be published. Required fields are marked *

ಕ್ರೀಡೆ

Sania Mirza: ಶಮಿ ಜತೆ ಮದುವೆ ಟಾಕ್​ ಬೆನ್ನಲ್ಲೇ ಇನ್​ಸ್ಟಾಗ್ರಾಮ್​ನಲ್ಲಿ ‘YES’ ಎಂದು ಬರೆದುಕೊಂಡ ಸಾನಿಯಾ ಮಿರ್ಜಾ

Sania Mirza: ಶಮಿ ಜತೆ ಸಾನಿಯ ಮದುವೆಯಾಗಲಿದ್ದಾರೆ ಎಂಬ ಚರ್ಚೆಗಳು ನಡೆಯುತ್ತಿರುವ ಬೆನ್ನಲ್ಲೇ ಸಾನಿಯಾ ‘ಎಸ್’​ ಬರೆದಿರುವುದು ಈಗ ನೆಟ್ಟಿಗರಿಗೆ ಆಹಾರವಾಗಿದೆ. ಶಮಿ ಜತೆಗಿನ ಮದುವೆಯ ಕುರಿತಾಗಿಯೇ ಅವರು ಎಸ್​ ಎಂದು ಬರೆದುಕೊಂಡಿದ್ದಾರೆ ಎಂಬುದಾಗಿ ನೆಟ್ಟಿಗರು ಬಿಂಬಿಸಿದ್ದಾರೆ.

VISTARANEWS.COM


on

Sania Mirza
Koo

ಹೈದರಾಬಾದ್​: ಭಾರತದ ಮಾಜಿ ಟೆನಿಸ್​ ತಾರೆ ಸಾನಿಯಾ ಮಿರ್ಜಾ(Sania Mirza) ಅವರು ಪಾಕಿಸ್ತಾನ ಕ್ರಿಕೆಟಿಗ ಶೋಯೆಬ್ ಮಲಿಕ್ ಅವರಿಂದ ವಿಚ್ಛೇದನ ಪಡೆದ ಬಳಿಕ ಸಾನಿಯ ಮರು ಮದುವೆಯ ಬಗ್ಗೆ ಸಾಮಾಜಿಕ ಜಾಲತಾಣದಲ್ಲಿ ಆಗಾಗ ಸುದ್ದಿಗಳು ಹರಿದಾಡುತ್ತಿರುತ್ತದೆ. ಇತ್ತೀಚೆಗೆ ಟೀಮ್​ ಇಂಡಿಯಾದ ಕ್ರಿಕೆಟಿಗ ಮೊಹಮ್ಮದ್ ಶಮಿ(Mohammed Shami) ಜತೆಗೆ ಸಾನಿಯಾ ಮಿರ್ಜಾ ಮದುವೆಯಾಗುತ್ತಾರೆ ಎಂಬ ಊಹಾಪೋಹಾ ಹಬ್ಬಿತ್ತು. ಈ ಬಗ್ಗೆ ಸಾನಿಯಾ ತಂದೆ ಇದು ಸುಳ್ಳು ಸುದ್ದಿ, ಸಾಮಾಜಿಕ ಜಾಲತಾಣದಲ್ಲಿ ಹರಿದಾಡುವ ಸುದ್ದಿಯನ್ನು ನಂಬಬೇಡಿ ಎಂದು ಸ್ಪಷ್ಟನೆ ನೀಡಿದ್ದರು.

ಎಲ್ಲ ಚರ್ಚೆಗಳ ಮಧ್ಯೆ ಸಾನಿಯಾ ತಮ್ಮ ಇನ್‌ಸ್ಟಾಗ್ರಾಮ್‌ನಲ್ಲಿ ಮಗ ಇಝಾನ್ ಜತೆಗಿನ ಹೃದಯಸ್ಪರ್ಶಿ ಫೋಟೋಗಳನ್ನು ಹಂಚಿಕೊಂಡಿದ್ದಾರೆ. ಟಿ-ಶರ್ಟ್​ ಮತ್ತು ಕ್ಯಾಪ್‌ ತೊಟ್ಟು ಮಗನ ಜತೆಗೆ ಟೆನಿಸ್ ಕೋರ್ಟ್‌ನಲ್ಲಿ ಫೋಟೊ ಶೇರ್​ ಮಾಡಿದ್ದಾರೆ. ಇಲ್ಲಿ ಇವರಿಬ್ಬರ ಫೋಟೊಕಿಂತ ಮಹತ್ವ ಪಡೆದದ್ದು ಸಾನಿಯಾ ಧರಿಸಿದ ಟಿ-ಶರ್ಟ್​ ಮೇಲಿರುವ ಬರಹ. ಹೌದು ಸಾನಿಯಾ ಅವರು “ನಾನು ಚೆನ್ನಾಗಿರುತ್ತೇನೆ ಎಂಬ ಭಾವನೆ ನನಗೆ ಸಿಕ್ಕಿದೆ” ಎಂದು ಬರೆದಿರುವ ಟಿ-ಶರ್ಟ್​ ಹಾಕಿದ್ದು ಈ ಮೂಲಕ ತಮ್ಮ ಜೀವನ ಶೈಲಿಯ ಬಗ್ಗೆ ಮಾತನಾಡುವವರಿಗೆ ಪರೋಕ್ಷವಾಗಿ ತಕ್ಕ ಉತ್ತರ ನೀಡಿದ್ದಾರೆ. ಜತೆಗೆ ಈ ಫೋಟೋಗೆ “YES” ಎಂಬ ಕ್ಯಾಪ್ಶನ್ ನೀಡಲಾಗಿದೆ.

ಇದನ್ನೂ ಓದಿ Sania Mirza: ಹೇಳಲು ತುಂಬಾ ಇದೆ, ಆದರೂ ಮೌನವಾಗಿದ್ದೇನೆ; ಸಾನಿಯಾ ಮಿರ್ಜಾ ಪೋಸ್ಟ್​ನ ಅರ್ಥವೇನು?

ಶಮಿ ಜತೆ ಸಾನಿಯ ಮದುವೆಯಾಗಲಿದ್ದಾರೆ ಎಂಬ ಚರ್ಚೆಗಳು ನಡೆಯುತ್ತಿರುವ ಬೆನ್ನಲ್ಲೇ ಸಾನಿಯಾ ‘ಎಸ್’​ ಬರೆದಿರುವುದು ಈಗ ನೆಟ್ಟಿಗರಿಗೆ ಆಹಾರವಾಗಿದೆ. ಶಮಿ ಜತೆಗಿನ ಮದುವೆಯ ಕುರಿತಾಗಿಯೇ ಅವರು ಎಸ್​ ಎಂದು ಬರೆದುಕೊಂಡಿದ್ದಾರೆ ಎಂಬುದಾಗಿ ನೆಟ್ಟಿಗರು ಬಿಂಬಿಸಿದ್ದಾರೆ.

ಕೆಲ ದಿನಗಳ ಹಿಂದಷ್ಟೇ ಸಾನಿಯಾ ತಮ್ಮ ಇನ್​ಸ್ಟಾಗ್ರಾಮ್​ ಖಾತೆಯಲ್ಲಿ ಅಭಿಮಾನಿಗಳಿಗೆ ‘ಸಬರ್‌ ಕರೋ ಆಲ್‌ವೇಸ್​  ಸಬರ್‌ ಕರೋ…'(ಯಾವಾಗಲೂ ಕೊಂಚ ತಾಳ್ಮೆಯಿಂದ ಇರಿ) ಎಂದು ಬರೆದುಕೊಂಡಿದ್ದರು. ಅವರ ಈ ಮಾರ್ಮಿಕ ಪೋಸ್ಟ್​ ಕಂಡು ನೆಟ್ಟಿಗರು ಸಾನಿಯಾ ಅವರು ಶಮಿ ಜತೆ ಹಸೆಮಣೆ(Sania Mirza marrying Mohammed Shami) ಏರುವುದು ಪಕ್ಕಾ ಎಂದು ಹೇಳಲಾರಂಭಿಸಿದ್ದರು. ಇದೀಗ ಎಸ್​ ಎನ್ನುವ ಬರಹ ಮತ್ತೆ ಸದ್ದು ಮಾಡುತ್ತಿವೆ.

ಕೆಲವು ತಿಂಗಳುಗಳ ಹಿಂದೆ ಪಾಕಿಸ್ತಾನ ಕ್ರಿಕೆಟ್​ ತಂಡದ ಮಾಜಿ ಆಟಗಾರ ಶೋಯೆಬ್‌ ಮಲಿಕ್‌(Shoaib Malik) ಅವರಿಗೆ ಸಾನಿಯಾ ವಿಚ್ಚೇದನ ನೀಡಿದ್ದರು. ಈ ಮೂಲಕ 13 ವರ್ಷದ ದಾಂಪತ್ಯ ಜೀವನವನ್ನು ಅಂತ್ಯಗೊಳಿಸಿದ್ದರು. ಡೀಪ್‌ಫೇಕ್‌(Deepfake) ಮೂಲಕ ಶಮಿ ಮತ್ತು ಸಾನಿಯಾ ಮಿರ್ಜಾ ಅವರ ಮುಖವನ್ನು ಈ ಹಿಂದೆ ಸಾನಿಯಾ ಅವರು ಮಲಿಕ್ ಜತೆಗೆ ತೆಗಿಸಿಕೊಂಡಿದ್ದ​ ಮದುವೆಯ ಫೋಟೊಗೆ ಫೋಟೊಗೆ ಶಮಿಯ ಮುಖವನ್ನು ಎಡಿಟ್​ ಮಾಡಿ ಶಮಿ ಮತ್ತು ಸಾನಿಯಾ ಗುಟ್ಟಾಗಿ ನಿಶ್ಚಿತಾರ್ಥ ಮಾಡಿಕೋಂಡಿದ್ದಾರೆ ಎಂದು ಟ್ವೀಟರ್​ ಎಕ್ಸ್​ನಲ್ಲಿ ಕಿಡಿಗೇಡಿಗಳು ವೈರಲ್​ ಮಾಡಿದ್ದರು.

Continue Reading

Latest

Viral Video: ನಡುರಸ್ತೆಯಲ್ಲಿ ಬಟ್ಟೆ ಕಳಚಿ ಬೆತ್ತಲೆಯಾಗಿ ನಡೆದ ಮಹಿಳೆ; ಪುರುಷರು ಕಕ್ಕಾಬಿಕ್ಕಿ!

Viral Video ಫ್ಯಾಷನ್ ಎನ್ನುವುದು ಎಷ್ಟರ ಮಟ್ಟಿಗೆ ನಮ್ಮನ್ನು ಆವರಿಸಿದೆ ಎಂದರೆ ಇಂದು ಏನೇ ಮಾಡಿದರೂ ಸರಿ ಎನ್ನುವ ಮಟ್ಟಿಗೆ ಆಗಿದೆ. ಮೈ ತುಂಬಾ ಬಟ್ಟೆ ಧರಿಸುವುದು ನಮ್ಮ ಸಂಪ್ರದಾಯ ಆದರೆ ಈಗ ತುಂಡುಡುಗೆ ಧರಿಸಿಕೊಂಡು ಹೋಗುವುದೇ ಫ್ಯಾಷನ್ ಆಗಿದೆ. ಆದರೆ ಇಲ್ಲೊಬ್ಬಳು ಮಹಿಳೆ ನಡುರಸ್ತೆಯಲ್ಲಿ ಮೈ ಮೇಲೆ ಬಟ್ಟೆ ಇಲ್ಲದೇ ನಡೆದುಕೊಂಡು ಹೋಗಿದ್ದಾಳೆ. ಇವಳು ಹೀಗ್ಯಾಕೆ ಮಾಡಿದ್ದಾಳೆ ಎಂಬುದಕ್ಕೆ ಕಾರಣ ಗೊತ್ತಿಲ್ಲ, ಇನ್ನು ಈ ಮಹಿಳೆ ಯಾರೂ ಎಂಬುದು ಕೂಡ ತಿಳಿದಿಲ್ಲ.

VISTARANEWS.COM


on

Viral Video
Koo

ಗಾಜಿಯಾಬಾದ್ : ಹೆಣ್ಣಾಗಲಿ, ಗಂಡಾಗಲಿ ಅಗತ್ಯ ಇರುವಷ್ಟಾದರೂ ಬಟ್ಟೆ ತೊಟ್ಟುಕೊಂಡರೆ ಚೆನ್ನ. ಆದರೆ ಈಗ ಬಟ್ಟೆ ಬಗ್ಗೆ ಮಾತನಾಡುವ ಹಾಗೇ ಇಲ್ಲ. ಫ್ಯಾಷನ್‌ ನೆಪವೊಡ್ಡಿ ತಮ್ಮಿಷ್ಟದ ಬಟ್ಟೆ ಧರಿಸಿಕೊಂಡು ಓಡಾಡುವುದು ಸಾಮಾನ್ಯವಾಗಿ ಬಿಟ್ಟಿದೆ. ಆದರೆ ಇಲ್ಲೊಬ್ಬ ಮಹಿಳೆ ನಡುರಸ್ತೆಯಲ್ಲಿ ನಗ್ನವಾಗಿ ಓಡಾಡಿದ್ದು, ಇದಕ್ಕೆ ಸಂಬಂಧಪಟ್ಟ ವಿಡಿಯೊ ವೈರಲ್ (Viral Video )ಆಗಿದೆ.

ವಿಡಿಯೊದಲ್ಲಿ ಗಾಜಿಯಾಬಾದ್‌ನ ಮೋಹನ್ ನಗರದ ಚೌರಾಹಾದ ಜನನಿಬಿಡ ರಸ್ತೆಯಲ್ಲಿ ಮಹಿಳೆ ನಗ್ನವಾಗಿ ನಡೆದುಕೊಂಡು ಹೋಗುವುದು ಕಂಡುಬಂದಿದೆ. ಆದರೆ ಮಹಿಳೆಯನ್ನು ಈ ಸ್ಥಿತಿಯಲ್ಲಿ ಕಂಡು ಪುರುಷರು ಬಿಡಿ ಮಹಿಳೆಯರು ಕೂಡ ಸುಮ್ಮನೆ ನೋಡಿ ಹೋದರೇ ವಿನಃ ಆಕೆಯನ್ನು ತಡೆಯಲು ಅಥವಾ ಅವಳಿಗೆ ಬಟ್ಟೆಗಳನ್ನು ನೀಡಲು ಯಾರೂ ಪ್ರಯತ್ನಿಸುತ್ತಿಲ್ಲ ಎಂಬುವುದನ್ನು ಕಾಣಬಹುದು. ಆದರೆ ಮಹಿಳೆಯ ಗುರುತು ತಿಳಿದುಬಂದಿಲ್ಲ. ವೀಡಿಯೊ ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಆದ ನಂತರ ಪೊಲೀಸ್ ಅಧಿಕಾರಿಗಳು ಘಟನೆಯ ಬಗ್ಗೆ ತಿಳಿದು ಮಹಿಳೆಯನ್ನು ಗುರುತಿಸಲು ಮತ್ತು ಅವಳು ಎಲ್ಲಿಗೆ ಹೋದಳು ಎಂಬುದನ್ನು ಪತ್ತೆ ಹಚ್ಚಲು ವಿಡಿಯೊ ಬಗ್ಗೆ ತನಿಖೆ ನಡೆಸುತ್ತಿದ್ದಾರೆ.

ವರದಿಗಳ ಪ್ರಕಾರ, ಈ ವೀಡಿಯೊವನ್ನು ಜೂನ್ 25 ರಂದು ರೆಕಾರ್ಡ್ ಮಾಡಲಾಗಿದ್ದು, 10 ಸೆಕೆಂಡುಗಳ ಈ ವಿಡಿಯೊದಲ್ಲಿ ವಾಹನಗಳು ಮತ್ತು ಪಾದಚಾರಿಗಳು ಹಾದುಹೋಗುವ ಭಾರಿ ದಟ್ಟಣೆಯ ಸ್ಥಳದಲ್ಲಿ ಮಹಿಳೆಯನ್ನು ಸೆರೆಹಿಡಿಯಲಾಗಿದೆ. ಮಹಿಳೆಯ ಗುರುತನ್ನು ಬಹಿರಂಗಪಡಿಸಲಾಗಿಲ್ಲ. ಅವಳು ಈ ಸ್ಥಿತಿಯಲ್ಲಿ ಏಕೆ ಇದ್ದಳು ಅಥವಾ ಅವಳು ಹೇಗೆ ರಸ್ತೆಗೆ ಬಂದಳು ಎಂಬುದು ಸ್ಪಷ್ಟವಾಗಿಲ್ಲ. ಈ ಘಟನೆಯು ಕಾನೂನು ಮತ್ತು ಸುವ್ಯವಸ್ಥೆಯ ಬಗ್ಗೆ ಆಕ್ರೋಶ ಮತ್ತು ಟೀಕೆಗಳನ್ನು ಹುಟ್ಟುಹಾಕಿದೆ. ಪೊಲೀಸ್ ಬೂತ್ ಸಮೀಪದಲ್ಲಿದ್ದರೂ, ಕೂಡ ಬುಧವಾರ ರಾತ್ರಿ ವಿಡಿಯೊ ಆನ್ ಲೈನ್ ನಲ್ಲಿ ಕಾಣಿಸಿಕೊಳ್ಳುವವರೆಗೂ ಅಧಿಕಾರಿಗಳಿಗೆ ತಿಳಿದಿರಲಿಲ್ಲ ಎನ್ನಲಾಗಿದೆ.

ಈ ವರ್ಷದ ಆರಂಭದಲ್ಲಿ, ದೆಹಲಿಯಲ್ಲಿ ಪ್ರಯಾಣಿಕರಿಂದ ತುಂಬಿದ್ದ ಬಸ್‌ನಲ್ಲಿ ಬಿಕಿನಿ ಧರಿಸಿದ ಮಹಿಳೆಯೊಬ್ಬರು ಪ್ರಯಾಣ ಮಾಡುತ್ತಿರುವ ವಿಡಿಯೊ ಕೂಡ ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಆಗಿತ್ತು. ಈ ಮಹಿಳೆಯನ್ನು ನೋಡಿ ಪ್ರಯಾಣಿಕರಿಂದ ವಿಭಿನ್ನ ಪ್ರತಿಕ್ರಿಯೆ ಕಂಡುಬಂದಿತ್ತು, ಕೆಲವರು ಆಶ್ಚರ್ಯದಿಂದ ನೋಡಿದರು ಮತ್ತು ಕೆಲವರು ಅಸಡ್ಡೆ ತೋರಿದರು.

ಈ ವಿಡಿಯೊ ಸಾಮಾಜಿಕ ಮಾಧ್ಯಮದಲ್ಲಿ ಮಿಶ್ರ ಪ್ರತಿಕ್ರಿಯೆ ವ್ಯಕ್ತವಾಗಿದೆ. ಈ ಉಡುಪನ್ನು ಸಾರ್ವಜನಿಕ ಬಸ್‌ಗಳಲ್ಲಿ ಪ್ರಯಾಣಿಸಲು ಸೂಕ್ತವಲ್ಲ ಎಂದು ಹಲವರು ಟೀಕೆ ಮಾಡಿದರೆ, ಕೆಲವರು ಇದರಲ್ಲಿ ತಪ್ಪೇನು ಎಂದು ಆಕೆಗೆ ಬೆಂಬಲ ನೀಡಿದ್ದಾರೆ.

Continue Reading

ವೈರಲ್ ನ್ಯೂಸ್

Viral Video: ಖೈದಿ ಜೊತೆಗೆ ಮಹಿಳಾ ಪೊಲೀಸ್‌ ಅಧಿಕಾರಿ ಲೈಂಗಿಕ ಕ್ರಿಯೆ; ಭಾರೀ ವೈರಲ್‌ ಆಗ್ತಿದೆ ಈ ವಿಡಿಯೋ

Viral Video: ಎಕ್ಸ್‌ನಲ್ಲಿ ಭಾರೀ ವೈರಲ್‌ ಆಗಿರುವ ಈ ವಿಡಿಯೋದಲ್ಲಿ ಪೊಲೀಸ್‌ ಸಮವಸ್ತ್ರದಲ್ಲಿರುವ ಜೈಲಿನ ಸಿಬ್ಬಂದಿ ಅಲ್ಲಿನ ಕೈದಿ ಜೊತೆ ಲೈಂಗಿಕ ಕ್ರಿಯೆಯಲ್ಲಿ ತೊಡಗಿರುವುದನ್ನು ನೋಡಬಹುದಾಗಿದೆ. ಇದನ್ನು ಅದೇ ಕೋಣೆಯಲ್ಲಿದ್ದ ಮತ್ತೊರ್ವ ಖೈದಿ ತನ್ನ ಮೊಬೈಲ್‌ನಲ್ಲಿ ಶೂಟ್‌ ಮಾಡಿಕೊಂಡಿದ್ದಾನೆ.

VISTARANEWS.COM


on

Viral Video
Koo

ಲಂಡನ್‌: ಜೈಲಿನ ಮಹಿಳಾ ಸಿಬ್ಬಂದಿ ಕೈದಿಯ ಜೊತೆ ಲೈಂಗಿಕ ಕ್ರಿಯೆ(Physical relationship) ನಡೆಸಿರುವ ಶಾಕಿಂಗ್‌ ಘಟನೆ ಇಂಗ್ಲೆಂಡ್‌ನ ವಾಂಡ್‌ವರ್ಥ್‌ನ ಎಚ್‌ಎಂಪಿ ಜೈಲಿನಲ್ಲಿ ನಡೆದಿದೆ. ಈ ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ ಭಾರೀ ವೈರಲ್‌(Viral Video) ಆಗಿದ್ದು, ಪೊಲೀಸರು ತನಿಖೆ ಶುರು ಮಾಡಿದ್ದಾರೆ. ವಿಡಿಯೋ ನೋಡಿದ ನೆಟ್ಟಿಗರು ಆಘಾತ ವ್ಯಕ್ತಪಡಿಸಿದ್ದು, ಜೈಲಿನಲ್ಲೇ ಇಂತಹ ಸ್ಥಿತಿ ಇದ್ದರೆ ಹೇಗೆ ಎಂದು ಪ್ರಶ್ನಿಸಿದ್ದಾರೆ.

ವೈರಲ್‌ ಆಗಿರುವ ವಿಡಿಯೋದಲ್ಲೇನಿದೆ?

ಎಕ್ಸ್‌ನಲ್ಲಿ ಭಾರೀ ವೈರಲ್‌ ಆಗಿರುವ ಈ ವಿಡಿಯೋದಲ್ಲಿ ಪೊಲೀಸ್‌ ಸಮವಸ್ತ್ರದಲ್ಲಿರುವ ಜೈಲಿನ ಸಿಬ್ಬಂದಿ ಅಲ್ಲಿನ ಕೈದಿ ಜೊತೆ ಲೈಂಗಿಕ ಕ್ರಿಯೆಯಲ್ಲಿ ತೊಡಗಿರುವುದನ್ನು ನೋಡಬಹುದಾಗಿದೆ. ಇದನ್ನು ಅದೇ ಕೋಣೆಯಲ್ಲಿದ್ದ ಮತ್ತೊರ್ವ ಖೈದಿ ತನ್ನ ಮೊಬೈಲ್‌ನಲ್ಲಿ ಶೂಟ್‌ ಮಾಡಿಕೊಂಡಿದ್ದಾನೆ. ಕೈಯಲ್ಲಿ ಸಿಗರೇಟ್‌ ಹಿಡಿದು ವಿಡಿಯೋ ಮಾಡುತ್ತಿರುವ ಆ ವ್ಯಕ್ತಿ ” ಹಾಯ್‌.. ನಾವು ಇವತ್ತು ಇತಿಹಾಸ ಸೃಷ್ಟಿಸಿದ್ದೇವೆ. ನಾನು ಹೇಳುತ್ತಿರುವುದು ಇದೇ ವಿಚಾರವನ್ನು ಎಂದು ಹೇಳುತ್ತಾ ಕ್ಯಾಮೆರಾವನ್ನು ತಿರುಗಿಸುತ್ತಾನೆ. ಅಲ್ಲಿ ಜೈಲಿನ ಸಿಬ್ಬಂದಿ ಮತ್ತು ಕೈದಿ ಲೈಂಗಿಕ ಚಟುವಟಿಕೆಯಲ್ಲಿ ಭಾಗಿರುವುದನ್ನು ಕಾಣಬಹುದಾಗಿದೆ. ಅದೂ ಅಲ್ಲೇ ಇದ್ದ ಬೆಡ್‌ ಮೇಲೆ ಕೈದಿಗಳ ಬಟ್ಟೆ ಬಿದ್ದಿರುವುದನ್ನು ಕಾಣಬಹುದಾಗಿದೆ.

ಇನ್ನು ಇದೇ ಸಂದರ್ಭದಲ್ಲಿ ಮತ್ತೊರ್ವ ಖೈದಿ ಸೆಲ್‌ ಒಳಗೆ ಬರಲು ಯತ್ನಿಸುತ್ತಾರೆ. ಆಗ ವಿಡಿಯೋ ಮಾಡುತ್ತಿದ್ದವನು “ಸ್ವಲ್ಪ ಹೊತ್ತು ಇರು” ಅಂತಾನೆ. ಆಮೇಲೆ ಕ್ಯಾಮೆರಾವನ್ನು ಸುತ್ತ ತಿರುಗಿಸುತ್ತಾ “ಇದು ವಾಂಡ್‌ವರ್ಥ್‌ ಜೈಲು” ಎಂದು ಹೇಳುತ್ತಿರುವುದನ್ನು ವಿಡಿಯೋದಲ್ಲಿ ಕಾಣಬಹುದಾಗಿದೆ.

ಇನ್ನು ಈ ಘಟನೆ ಬಗ್ಗೆ ಲಂಡನ್‌ ಪೊಲೀಸರು ಪ್ರತಿಕ್ರಿಯಿಸಿದ್ದು, ಇದು ವಾಂಡ್‌ವರ್ಥ್‌ನ ಎಚ್‌ಎಂಪಿ ಜೈಲಿನಲ್ಲೆ ನಡೆದಿರುವ ಘಟನೆ ಎಂಬುದು ಸ್ಪಷ್ಟವಾಗಿದೆ. ಕೇಸ್‌ ದಾಖಲಿಸಿಕೊಳ್ಳಲಾಗಿದ್ದು, ಪೊಲೀಸರು ತನಿಖೆ ನಡೆಸುತ್ತಿದ್ದಾರೆ. ಇದುವರೆಗೆ ಯಾವುದೇ ಬಂಧನವಾಗಿಲ್ಲ. ಕಾನೂನು ಸಚಿವಾಲಯದ ಜೊತೆಗೂ ಮಾತುಕತೆ ನಡೆದಿದೆ ಎಂದು ಹೇಳಿದ್ದಾರೆ.

HMP ಜೈಲು ಸೇವೆಯ ವಕ್ತಾರರು ಮಾತನಾಡಿ, ಘಟನೆಯು ಇತ್ತೀಚೆಗೆ ಸಂಭವಿಸಿದೆ ಎಂದು ಭಾವಿಸಲಾಗಿದೆ, ಮಹಿಳಾ ಸಿಬ್ಬಂದಿಯನ್ನು ಸೇವೆಯಿಂದ ಅಮಾನತುಗೊಳಿಸಲಾಗಿದೆ. ಸಿಬ್ಬಂದಿ ಭ್ರಷ್ಟಾಚಾರವನ್ನು ಸಹಿಸಲಾಗುವುದಿಲ್ಲ ಮತ್ತು ಈ ವೀಡಿಯೊದಲ್ಲಿ ಕಾಣಿಸಿಕೊಂಡಿರುವ ಜೈಲು ಅಧಿಕಾರಿಯ ವಿರುದ್ಧ ಪೊಲೀಸರಿಗೆ ದೂರು ದಾಖಲಿಸಲಾಗಿದೆ ಎಂದಿದ್ದಾರೆ.

ಇದನ್ನೂ ಓದಿ: Vikram Misri: ವಿದೇಶಾಂಗ ಕಾರ್ಯದರ್ಶಿಯಾಗಿ ವಿಕ್ರಮ್‌ ಮಿಸ್ರಿ ಆಯ್ಕೆ; ಚೀನಾ ವಿಷಯದಲ್ಲಿ ಇವರು ಎಕ್ಸ್‌ಪರ್ಟ್!

Continue Reading

Latest

Viral Video: ಈ ಆರು ಯೂಟ್ಯೂಬರ್‌ಗಳು ಜೈಲು ಪಾಲಾಗಲು ಶಾರುಖ್‌ ಖಾನ್‌ ಕಾರಣವಂತೆ!

Viral Video: ಈಗ ಸೋಶಿಯಲ್ ಮೀಡಿಯಾದ್ದೇ ಹವಾ. ಕೈಲ್ಲೊಂದು ಮೊಬೈಲ್ ಇದ್ದರೆ ಜಗತ್ತೇ ಮೆರಯುವ ಯುವಜನಾಂಗ ಏನು ಮಾಡುತ್ತಿದ್ದೇವೆ? ಇದು ಸರಿನಾ… ತಪ್ಪಾ…? ಇದರ ಪರಿವೇ ಇಲ್ಲದೇ ವರ್ತಿಸುತ್ತಿದ್ದಾರೆ. ಉತ್ತರ ಪ್ರದೇಶದ ಬುಲಂದ್ ಶಹರ್ನ ದಿಬಾಯ್‌ನಲ್ಲಿ ಆರು ಯುಟ್ಯೂಬರ್‌ಗಳು ಜವಾನ್ ಚಿತ್ರದಲ್ಲಿ ನಟ ಶಾರುಖ್ ಖಾನ್ ಅವರು ಬ್ಯಾಂಡೇಜ್ ಧರಿಸಿದ ಲುಕ್ ಅನ್ನು ನಕಲು ಮಾಡಿ ಇಡೀ ಪಟ್ಟಣವನ್ನು ಸುತ್ತಿದ್ದಾರೆ. ಇವರನ್ನು ಕಂಡು ಸ್ಥಳೀಯರು ಗಾಬರಿಗೊಂಡಿದ್ದಾರೆ ಎನ್ನಲಾಗಿದೆ. ಈ ವಿಡಿಯೊ ಸೋಶಿಯಲ್ ವೀಡಿಯಾದಲ್ಲಿ ವೈರಲ್ ಆಗಿದ್ದು, ಮಾತ್ರವಲ್ಲ ಇದರಿಂದ ಪೊಲೀಸರು ಇವರನ್ನು ಹುಡುಕಿಕೊಂಡು ಬರುವಂತಾಯಿತು!

VISTARANEWS.COM


on

Viral Video
Koo

ಸೋಶಿಯಲ್ ಮೀಡಿಯಾದಲ್ಲಿ ಅತಿ ಹೆಚ್ಚು ಲೈಕ್ಸ್ , ಕಾಮೆಂಟ್‌ ಪಡೆಯಲು ಯುವಕರು ಅನೇಕ ದುಸ್ಸಾಹಸಗಳಿಗೆ ಕೈ ಹಾಕಿ ಸಂಕಷ್ಟಕ್ಕೀಡಾಗುತ್ತಿದ್ದಾರೆ. ಅದೇ ರೀತಿ ಇದೀಗ ಯುವಕರು ಸಿನಿಮಾವೊಂದರಲ್ಲಿ ಹೀರೊ ಲುಕ್‌ ಅನ್ನು ನಕಲು ಮಾಡಲು ಹೋಗಿ ಪೊಲೀಸರ ಅತಿಥಿಯಾಗಿದ್ದಾರೆ. ಇದಕ್ಕೆ ಸಂಬಂಧಿಸಿದ ವಿಡಿಯೊ ವೈರಲ್
(Viral Video) ಆಗಿದೆ.

ಉತ್ತರ ಪ್ರದೇಶದ ಬುಲಂದ್ ಶಹರ್‌ನ ದಿಬಾಯ್‌ನಲ್ಲಿ ಆರು ಯುಟ್ಯೂಬರ್‌ಗಳು ಜವಾನ್ ಚಿತ್ರದಲ್ಲಿ ನಟ ಶಾರುಖ್ ಖಾನ್ ಅವರು ಬ್ಯಾಂಡೇಜ್ ಧರಿಸಿದ ಲುಕ್ ಅನ್ನು ನಕಲು ಮಾಡಿ ಇಡೀ ಪಟ್ಟಣವನ್ನು ಸುತ್ತಿದ್ದಾರೆ. ಇವರನ್ನು ಕಂಡು ಸ್ಥಳೀಯರು ಗಾಬರಿಗೊಂಡಿದ್ದಾರೆ ಎನ್ನಲಾಗಿದೆ.

ಈ ವಿಡಿಯೊದಲ್ಲಿ ಆರು ಮಂದಿ ಯುವಕರು ರಕ್ತದಂತೆ ಕಾಣುವ ಬಣ್ಣವನ್ನು ಬ್ಯಾಂಡೇಜ್‌ಗೆ ಬಳಿದುಕೊಂಡು ಅದನ್ನು ಮುಖಕ್ಕೆ ಸುತ್ತಿಕೊಂಡು ಕೈಯಲ್ಲಿ ಕೋಲುಗಳನ್ನು ಹಿಡಿದು ಜವಾನ್ ಚಿತ್ರದಲ್ಲಿ ನಟ ಶಾರುಖ್ ಖಾನ್ ಅವರ ಲುಕ್ ಅನ್ನು ನಕಲು ಮಾಡಿ ಇಡೀ ಪಟ್ಟಣವನ್ನು ಸುತ್ತಿಹಾಕಿದ್ದಾರೆ. ಇವರಲ್ಲಿ ಒಬ್ಬ ಶರ್ಟ್ ಧರಿಸಿದೆ ತನ್ನ ಇಡೀ ದೇಹವನ್ನು ರಕ್ತದ ಕಲೆಯಂತೆ ಕಾಣುವ ಬ್ಯಾಂಡೇಜ್‌ನಿಂದ ಮುಚ್ಚಿಕೊಂಡಿದ್ದಾನೆ. ಇವರನ್ನು ಕಂಡು ಸ್ಥಳೀಯರು ಗಾಬರಿಗೊಂಡಿರುವುದು ವಿಡಿಯೊದಲ್ಲಿ ಕಂಡುಬಂದಿದೆ. ಈ ವಿಡಿಯೊ ಸೋಶಿಯಲ್ ವೀಡಿಯಾದಲ್ಲಿ ವೈರಲ್ ಆಗಿದ್ದು, ಮಾತ್ರವಲ್ಲ ಇದರಿಂದ ಪೊಲೀಸರು ಇವರನ್ನು ಹುಡುಕಿಕೊಂಡು ಬರುವಂತಾಗಿದೆ. ಈ ಆರು ಮಂದಿ ಯುವಕರನ್ನು ಪೊಲೀಸರು ಬಂಧಿಸಿದ್ದಾರೆ ಎನ್ನಲಾಗಿದೆ.

ವಿಡಿಯೊ 15 ನಿಮಿಷಗಳ ಕಾಲವಿದ್ದು, ಸಮಾಜದ ಜನತೆಗೆ ಉಪದ್ರವ ನೀಡುವಂತಹ ಈ ರೀಲ್ಸ್ ಮಾಡಿದವರ ವಿರುದ್ಧ ಕ್ರಮ ಕೈಗೊಳ್ಳುವಂತೆ ಇದಕ್ಕೆ ಶೀರ್ಷಿಕೆ ನೀಡಲಾಗಿದೆ. ಈ ಆರು ಮಂದಿ ಸ್ಥಳೀಯರನ್ನು ಹೆದರಿಸಲು ಪ್ರಯತ್ನಿಸಿದ್ದಾರೆ ಎಂದು ಆರೋಪಿಸಿ ಪೊಲೀಸರು ಅವರನ್ನು ಬಂಧಿಸಿದ್ದಾರೆ. ಮತ್ತು ಆರೋಪಿಗಳ ವಿರುದ್ಧ ಕ್ರಮ ಕೈಗೊಳ್ಳುವುದಾಗಿ ತಿಳಿಸಿದ್ದಾರೆ. ಹಾಗೇ ಮುಂದೆ ಇಂತಹ ಕುಚೇಷ್ಠೆಗಳನ್ನು ಮಾಡದಂತೆ ಎಚ್ಚರಿಕೆ ನೀಡಿದ್ದಾರೆ ಎನ್ನಲಾಗಿದೆ.

ಇದನ್ನೂ ಓದಿ: ರೀಲ್ಸ್ ಮಾಡಲು ಹೋದ ಹುಡುಗರು; ರೈಲಿನ ಪ್ರಯಾಣಿಕರು ಏನು ಮಾಡಿದರು ನೋಡಿ!

ರೀಲ್ಸ್‌ಗಾಗಿ ಯುವಕರು ಇಂತಹ ಕುಚೇಷ್ಠೆಗಳನ್ನು ಈ ಹಿಂದೆ ಹಲವು ಬಾರಿ ಮಾಡಿದ್ದಾರೆ. ಈ ಬಗ್ಗೆ ಪೊಲೀಸರು ಅನೇಕ ಬಾರಿ ಎಚ್ಚರಿಕೆ ನೀಡಿದರೂ ಕೂಡ ಇಂತಹ ಘಟನೆಗಳು ನಡೆಯುತ್ತಿರುತ್ತದೆ. ಈ ಹಿಂದೆ ಪಾಕಿಸ್ತಾನದಲ್ಲಿ ಯುವಕರು ಗುಂಪೊಂದು ತಮಾಷೆ ರೀಲ್ ಮಾಡಲು ವೇಗವಾಗಿ ಬರುವ ರೈಲಿಗೆ ನೀರು ಚುಮ್ಮುವಂತೆ ರೈಲು ಹಳಿ ಮೇಲೆ ಹಾದು ಹೋಗುವ ತೊರೆಗೆ ತಮ್ಮ ಬೈಕ್ ಅನ್ನು ಅಡ್ಡಲಾಗಿ ನಿಲ್ಲಿಸಿ ರೈಲಿನ ಪ್ರಯಾಣಿಕರಿಂದ ಒದೆ ತಿಂದಿದ್ದಾರೆ. ಹಾಗೇ ರೀಲ್ಸ್ ಗಾಗಿ ಪಾಳುಬಿದ್ದ ಕಟ್ಟಡದ ಮೇಲಿಂದ ಸ್ನೇಹಿತನ ಕೈಹಿಡಿದು ಕೆಳಗಿಳಿದು ನೇತಾಡಿದ ಯುವತಿಯನ್ನು ಈ ಹಿಂದೆ ಪೊಲೀಸರು ಬಂಧಿಸಿದ್ದರು.

Continue Reading
Advertisement
V Somanna
ಪ್ರಮುಖ ಸುದ್ದಿ1 second ago

V Somanna: ಹೆಜ್ಜಾಲ- ಚಾಮರಾಜನಗರ ರೈಲ್ವೆ ಕಾರ್ಯ ಶೀಘ್ರದಲ್ಲಿ: ಸಚಿವ ಸೋಮಣ್ಣ

Actor Darshan Renuka swamy case chitral support by vinay gowda
ಸ್ಯಾಂಡಲ್ ವುಡ್4 mins ago

Actor Darshan: ʻಚಿತ್ರಾಲ್ʼ ಬಿಕಿನಿ ಮಾಡೆಲ್‌, ಕೆಟ್ಟ ಕಮೆಂಟ್‌ ಮಾಡಬೇಡಿ ಎಂದ ವಿನಯ್ ಗೌಡ !

Opposition party leader r ashok latest statement in chikkaballapur
ಕರ್ನಾಟಕ6 mins ago

R Ashok: ಪ್ರತಿ ಕುಟುಂಬದಿಂದ 8-10 ಸಾವಿರ ರೂ. ದರೋಡೆ ಮಾಡುತ್ತಿರುವ ಕಾಂಗ್ರೆಸ್‌ ಸರ್ಕಾರ: ಆರ್‌.ಅಶೋಕ್ ಆರೋಪ

Video conference meeting with Tehsildars by DC Gangubai Manakar
ಉತ್ತರ ಕನ್ನಡ7 mins ago

Uttara Kannada News: ಜಿಲ್ಲೆಯ ಮಾಜಿ ಸೈನಿಕರು, ಅಶಕ್ತರಿಗೆ ಭೂಮಿ ಒದಗಿಸಲು ಕ್ರಮ: ಡಿಸಿ ಗಂಗೂಬಾಯಿ ಮಾನಕರ್‌

VSK Media Awards 2024 Programme in Bengaluru on June 30
ಕರ್ನಾಟಕ8 mins ago

VSK Media Awards 2024: ಬೆಂಗಳೂರಿನಲ್ಲಿ ಜೂ.30 ರಂದು “ವಿಎಸ್‌ಕೆ ಮಾಧ್ಯಮ ಪ್ರಶಸ್ತಿ” ಪ್ರದಾನ

Prajwal Revanna Case
ಪ್ರಮುಖ ಸುದ್ದಿ24 mins ago

Prajwal Revanna Case: ಪ್ರಜ್ವಲ್ ರೇವಣ್ಣಗೆ ಜುಲೈ 8ರವರೆಗೆ ನ್ಯಾಯಾಂಗ ಬಂಧನ

Stabbing
ದೇಶ25 mins ago

Stabbing: ಕೋಪದ ಕೈಗೆ ಬುದ್ದಿ ಕೊಟ್ರೆ ಹೀಗೇ ಆಗೋದು! ಸಹಪಾಠಿಯನ್ನೇ ಇರಿದು ಕೊಂದ ವಿದ್ಯಾರ್ಥಿ

IND vs SA Final
ಕ್ರೀಡೆ29 mins ago

IND vs SA Final: ಭಾರತ ಸೋತರೆ ರೋಹಿತ್ ಈ ಅನಾಹುತ ಮಾಡಿಕೊಳ್ಳಬಹುದು; ಮಾಜಿ ನಾಯಕನಿಂದ ಶಾಕಿಂಗ್​ ಹೇಳಿಕೆ ​

Road Accident
ಕ್ರೈಂ34 mins ago

Road Accident : ಬೆಂ-ಮೈ ಎಕ್ಸ್‌ಪ್ರೆಸ್‌ ವೇನಲ್ಲಿ ಡಿವೈಡರ್‌ಗೆ ಗುದ್ದಿ ಹಳ್ಳಕ್ಕೆ ಜಿಗಿದ ಕೆಎಸ್‌ಆರ್‌ಟಿಸಿ; ಶಿರಾಡಿಘಾಟ್‌ನಲ್ಲಿ ಸರಣಿ ಅಪಘಾತ

Job Alert
ಉದ್ಯೋಗ1 hour ago

Job Alert: 10ನೇ ತರಗತಿ ಪಾಸಾದವರಿಗೆ ಗುಡ್‌ನ್ಯೂಸ್‌; SSCಯಿಂದ ಬರೋಬ್ಬರಿ 8,326 ಹುದ್ದೆಗಳ ಭರ್ತಿಗೆ ಅರ್ಜಿ ಆಹ್ವಾನ

Sharmitha Gowda in bikini
ಕಿರುತೆರೆ9 months ago

Geetha Serial Kannada: ನಿದ್ದೆ ಕದ್ದ ಚೋರಿ! ನಟಿ `ಭಾನುಮತಿ’ ಹಾಟ್‌ ಪೋಟೊಗಳಿಗೆ ಫ್ಯಾನ್ಸ್ ಫುಲ್ ಫಿದಾ

Kannada Serials
ಕಿರುತೆರೆ9 months ago

Kannada Serials TRP: 2ನೇ ಸ್ಥಾನದಲ್ಲಿ 2 ಧಾರಾವಾಹಿಗಳು; ಟಿಆರ್‌ಪಿ ರೇಸ್‌ನಲ್ಲಿಲ್ಲ ಭಾಗ್ಯಲಕ್ಷ್ಮೀ!

Bigg Boss- Saregamapa 20 average TRP
ಕಿರುತೆರೆ8 months ago

Kannada Serials TRP: ಏಳನೇ ಸ್ಥಾನಕ್ಕೆ ʻಅಮೃತಧಾರೆʼ ಕುಸಿತ; ಬಿಗ್‌ ಬಾಸ್‌-ಸರಿಗಮಪ ಟಿಆರ್‌ಪಿ ಎಷ್ಟು?

galipata neetu
ಕಿರುತೆರೆ7 months ago

Kanyadana Serial: ಕಿರುತೆರೆಗೆ ಮತ್ತೆ ಎಂಟ್ರಿ ಕೊಟ್ಟ ʻಗಾಳಿಪಟʼ ಖ್ಯಾತಿಯ ʻನೀತುʼ!

Kannada Serials
ಕಿರುತೆರೆ9 months ago

Kannada Serials TRP: ನಾಲ್ಕನೇ ಸ್ಥಾನಕ್ಕೆ ಕುಸಿತ ಕಂಡ ʻಸೀತಾ ರಾಮʼ; ಟಿಆರ್‌ಪಿ ರೇಸ್‌ಗೆ ʻಭಾಗ್ಯಲಕ್ಷ್ಮಿʼ ಬ್ಯಾಕ್‌!

Kannada Serials
ಕಿರುತೆರೆ9 months ago

Kannada Serials TRP: ಟಿಆರ್‌ಪಿಯಲ್ಲಿ ʻಭಾಗ್ಯಲಕ್ಷ್ಮೀʼ ಹವಾ; ʻಪುಟ್ಟಕ್ಕನ ಮಕ್ಕಳುʼ ಧಾರಾವಾಹಿಗೆ ಸಂಕಷ್ಟ!

Bigg Boss' dominates TRP; Sita Rama fell to the sixth position
ಕಿರುತೆರೆ8 months ago

Kannada Serials TRP: ಟಿಆರ್‌ಪಿಯಲ್ಲಿ ʻಬಿಗ್ ಬಾಸ್ʼದೇ ಮೇಲುಗೈ; 6ನೇ ಸ್ಥಾನಕ್ಕೆ ಕುಸಿದ ʻಸೀತಾ ರಾಮʼ

geetha serial Dhanush gowda engagement
ಕಿರುತೆರೆ7 months ago

Dhanush Gowda: ಗೀತಾ ಧಾರಾವಾಹಿ ನಟನ ನಿಶ್ಚಿತಾರ್ಥ; ಭವ್ಯಾಳ ಕಮೆಂಟ್‌ ಬಾಕ್ಸ್‌ ಆಫ್‌!

varun
ಕಿರುತೆರೆ7 months ago

Brindavana Serial: ʼಬೃಂದಾವನʼ ಧಾರಾವಾಹಿಯಲ್ಲಿ ದೊಡ್ಡ ಟ್ವಿಸ್ಟ್‌; ಪ್ರಮುಖ ಪಾತ್ರಧಾರಿಯೇ ಬದಲು

Kannada Serials
ಕಿರುತೆರೆ10 months ago

Kannada Serials TRP: ಟಿಆರ್‌ಪಿಯಲ್ಲಿ ಏರಿಕೆ ಕಂಡ ʻಅಮೃತಧಾರೆʼ; ʻಗಟ್ಟಿಮೇಳʼಕ್ಕೆ ನಾಲ್ಕನೇ ಸ್ಥಾನ!

karnataka Rain
ಮಳೆ6 hours ago

Karnataka Rain: ಭಾರಿ ಮಳೆಗೆ ಮನೆಗಳ ಗೋಡೆ ಕುಸಿತ; ಕೂದಲೆಳೆ ಅಂತರದಲ್ಲಿ ವೃದ್ಧ ಪಾರು

karnataka Weather Forecast
ಮಳೆ22 hours ago

Karnataka Weather : ಅಬ್ಬಬ್ಬಾ.. ಮುಲ್ಕಿಯಲ್ಲಿ 30 ಸೆಂ.ಮೀ ಮಳೆ ದಾಖಲು; ವಾರಾಂತ್ಯದಲ್ಲೂ ಭಾರಿ ವರ್ಷಧಾರೆ

karnataka Rain
ಮಳೆ1 day ago

Karnataka Rain : ಭಾರಿ ಮಳೆಗೆ ಪಾತಾಳ ಸೇರಿದ ಬಾವಿ; ಅಲೆಗಳ ಹೊಡೆತಕ್ಕೆ ಸಮುದ್ರಪಾಲಾದ ಮನೆ

Karnataka Weather Forecast
ಮಳೆ2 days ago

Karnataka Weather : ಭಾರಿ ಮಳೆ ಹಿನ್ನೆಲೆ ದಕ್ಷಿಣ ಕನ್ನಡಕ್ಕೆ ರೆಡ್ ಅಲರ್ಟ್; ಶುಕ್ರವಾರವೂ ಶಾಲೆಗಳಿಗೆ ರಜೆ ಘೋಷಣೆ

karnataka Weather Forecast
ಮಳೆ2 days ago

Karnataka Weather : ಭಾರಿ ಮಳೆಗೆ ಸೇತುವೆಯಿಂದ ಹೊಳೆಗೆ ಬಿದ್ದ ಕಾರು; ಮರ ಹಿಡಿದು ಪ್ರಾಣ ಉಳಿಸಿಕೊಂಡ ಸವಾರರು

Heart Attack
ಕೊಡಗು2 days ago

Heart Attack : ಕೊಡಗಿನಲ್ಲಿ ಹೃದಯಾಘಾತಕ್ಕೆ ಯುವತಿ ಬಲಿ; ಹೆಚ್ಚಾಯ್ತು ಅಲ್ಪಾಯುಷ್ಯದ ಭಯ

karnataka Rains Effected
ಮಳೆ2 days ago

Karnataka Rain : ಧಾರಾಕಾರ ಮಳೆಗೆ ಸಡಿಲಗೊಂಡ ಗುಡ್ಡಗಳು; ಧರೆ ಕುಸಿದು ಮಣ್ಣಿನಡಿ ಸಿಲುಕಿದ ಇಬ್ಬರು ಮಕ್ಕಳು

karnataka Weather Forecast
ಮಳೆ5 days ago

Karnataka Weather : ಕರಾವಳಿಯಲ್ಲಿ ಮುಂದುವರಿದ ವರುಣಾರ್ಭಟ; ಸಾಂಪ್ರದಾಯಿಕ ಮೀನುಗಾರಿಕೆಗೂ ಬ್ರೇಕ್

karnataka weather Forecast
ಮಳೆ1 week ago

Karnataka Weather : ರಭಸವಾಗಿ ಹರಿಯುವ ನೀರಲ್ಲಿ ಸಿಲುಕಿದ ಬೊಲೆರೋ; ಬಿರುಗಾಳಿ ಸಹಿತ ಮಳೆ ಎಚ್ಚರಿಕೆ

International Yoga Day 2024
ಕರ್ನಾಟಕ1 week ago

International Yoga Day 2024: ಎಲ್ಲೆಲ್ಲೂ ಯೋಗಾಯೋಗ‌ಕ್ಕೆ ಮಂಡಿಯೂರಿದ ಜನತೆ

ಟ್ರೆಂಡಿಂಗ್‌