World Cup 2023 : ಭಾರತ, ಪಾಕ್ ಸೆಮಿಫೈನಲ್​ಗೇರಿದರೆ ಮತ್ತೆ ಪಂದ್ಯದ ತಾಣ ಬದಲಾಗೋದು ಖಚಿತ! ಯಾಕೆ ಗೊತ್ತೇ? - Vistara News

ಕ್ರಿಕೆಟ್

World Cup 2023 : ಭಾರತ, ಪಾಕ್ ಸೆಮಿಫೈನಲ್​ಗೇರಿದರೆ ಮತ್ತೆ ಪಂದ್ಯದ ತಾಣ ಬದಲಾಗೋದು ಖಚಿತ! ಯಾಕೆ ಗೊತ್ತೇ?

ಸೆಮಿಫೈನಲ್​ಗೆ ಪಾಕಿಸ್ತಾನ ತಂಡ ಏರಿದರೆ ಮುಂಬಯಿಯಲ್ಲಿ ಆಡಲು ಒಪ್ಪಲಿಕ್ಕಿಲ್ಲ. ಈ ವೇಳೆ ಕೋಲ್ಕೊತಾಗೆ ಪಂದ್ವವನ್ನು ರವಾನೆ ಮಾಡಬಹುದು.

VISTARANEWS.COM


on

India Pakistan Cricket
ಮಹತ್ವದ, ಕುತೂಹಲಕರ ಸುದ್ದಿಗಾಗಿ ಫಾಲೊ ಮಾಡಿ
Koo

ಮುಂಬಯಿ : ಅಂತಾರಾಷ್ಟ್ರೀಯ ಕ್ರಿಕೆಟ್ ಕೌನ್ಸಿಲ್ (ICC) ಜೂನ್​ 27ಂದು ಮುಂಬರುವ ಪುರುಷರ ಏಕದಿನ ಕ್ರಿಕೆಟ್ ವಿಶ್ವಕಪ್ 2023ರ ವೇಳಾಪಟ್ಟಿ ಪ್ರಕಟಿಸಿದೆ. ಅಕ್ಟೋಬರ್ 5ರಿಂದ ನವೆಂಬರ್ 19 ರವರೆಗೆ 10 ತಾಣಗಳಲ್ಲಿ ಪಂದ್ಯಾವಳಿ ನಡೆಯಲಿದ್ದು, ಇದುವರೆಗಿನ ಅತಿದೊಡ್ಡ ವಿಶ್ವಕಪ್ ಎನಿಸಿಕೊಳ್ಳಲಿದೆ. ಈ ಟೂರ್ನಿಯಲ್ಲಿ ಹತ್ತು ತಂಡಗಳು ಭಾಗವಹಿಸಲಿವೆ. ಅಹಮದಾಬಾದ್​​ನ ನರೇಂದ್ರ ಮೋದಿ ಸ್ಟೇಡಿಯಂ ಟೂರ್ನಿಯ ಆರಂಭಿಕ ಮತ್ತು ಫೈನಲ್ ಪಂದ್ಯಕ್ಕೆ ಆತಿಥ್ಯ ವಹಿಸಲಿದೆ. ಬೆಂಗಳೂರು, ಚೆನ್ನೈ, ದೆಹಲಿ, ಧರ್ಮಶಾಲಾ, ಹೈದರಾಬಾದ್, ಕೋಲ್ಕತಾ, ಲಕ್ನೋ, ಮುಂಬೈ ಮತ್ತು ಪುಣೆಯಲ್ಲಿ ಉಳಿದ ಪಂದ್ಯಗಳು ನಡೆಯಲಿವೆ. ಏತನ್ಮಧ್ಯೆ, ಹೈದರಾಬಾದ್ ಜೊತೆಗೆ ಗುವಾಹಟಿ ಮತ್ತು ತಿರುವನಂತಪುರಂ ಅಭ್ಯಾಸ ಪಂದ್ಯಗಳಿಗೆ ತಾಣಗಳಾಗಿವೆ.

ಅಹ್ಮದಾಬಾದ್​ನಲ್ಲಿ ಅಕ್ಟೋಬರ್​ 15ರಂದು ನಡೆಯಲಿರುವ ಭಾರತ ಮತ್ತು ಪಾಕಿಸ್ತಾನ ನಡುವಿನ ಪಂದ್ಯದ ವೇಳಾಪಟ್ಟಿಯ ಕೇಂದ್ರ ಬಿಂದುವಾಗಿತ್ತು. ಅಕ್ಟೋಬರ್ 8ರಂದು ಚೆನ್ನೈನಲ್ಲಿ ಐದು ಬಾರಿಯ ಚಾಂಪಿಯನ್ ಆಸ್ಟ್ರೇಲಿಯಾ ಮತ್ತು ಅಕ್ಟೋಬರ್ 11ರಂದು ನವದೆಹಲಿಯಲ್ಲಿ ಅಫ್ಘಾನಿಸ್ತಾನವನ್ನು ಎದುರಿಸಿದ ನಂತರ ರೋಹಿತ್ ಶರ್ಮಾ ನೇತೃತ್ವದ ತಂಡವು ಪಾಕ್​ ವಿರುದ್ಧ ಸೆಣಸಾಡಲಿದೆ. ಮತ್ತೊಂದೆಡೆ, ಪಾಕಿಸ್ತಾನವು ಅಕ್ಟೋಬರ್ 6 ಮತ್ತು 12 ರಂದು ಹೈದರಾಬಾದ್​ನಲ್ಲಿ ನಡೆಯಲಿರುವ ಎರಡು ಹಣಾಹಣಿಗಳಲ್ಲಿ ಅರ್ಹತಾ ಸುತ್ತಿನಿಂದ ಪಂದ್ಯಗಳ ವಿರುದ್ಧ ಆಡಲಿದೆ.

ಇದನ್ನೂ ಓದಿ : World Cup 2023 : ವೇಳಾಪಟ್ಟಿ ಪ್ರಕಟಗೊಂಡಿದ್ದರೂ ಪಾಕಿಸ್ತಾನ ತಂಡ ಬರುವುದು ಖಾತರಿಯಿಲ್ಲ!

2023 ರ ವಿಶ್ವಕಪ್​ನಲ್ಇ ಭಾರತವು ಒಟ್ಟು 10 ಸ್ಥಳಗಳಲ್ಲಿ ಒಂಬತ್ತರಲ್ಲಿ ಆಡಲಿದೆ. ಪಾಕಿಸ್ತಾನದ ಅಭಿಯಾನವು ಹೈದರಾಬಾದ್, ಚೆನ್ನೈ, ಬೆಂಗಳೂರು, ಕೋಲ್ಕತಾ ಮತ್ತು ಅಹಮದಾಬಾದ್ ಐದು ಸ್ಥಳಗಳಿಗೆ ಮಾತ್ರ ಸೀಮಿತವಾಗಿದೆ. ಆದಾಗ್ಯೂ, ಭಾರತ ಮತ್ತು ಪಾಕಿಸ್ತಾನ ಎರಡೂ ಸೆಮಿಫೈನಲ್ ಪ್ರವೇಶಿಸಿದರೆ ಮತ್ತೆ ತಾಣ ಬದಲಾವಣೆಯ ಪ್ರಸಂಗ ಶುರುವಾಗಲಿದೆ. ಭಾರತವೇನಾದರೂ ಸೆಮಿಫೈನಲ್​​ಗೇರಿದರೆ ಆ ಪಂದ್ಯವನ್ನು ಮುಂಬಯಿಯನ್ನು ಆಯೋಜಿಸುವುದು ಬಿಸಿಸಿಐ ಗುರಿ. ಆದರೆ, ಭಾರತ ಮತ್ತು ಪಾಕ್​ ತಂಡ ಮುಖಾಮುಖಿಯಾಗುವುದಾದರೆ ಅದು ಸಾಧ್ಯವಿಲ್ಲ. ಪಾಕಿಸ್ತಾನ ತಂಡ ಮುಂಬಯಿ ನಗರವನ್ನು ಯಾವತ್ತೂ ಆಯ್ಕೆ ಮಾಡಿಕೊಳ್ಳುವುದಿಲ್ಲ. ಹೀಗಾಗಿ ಕೋಲ್ಕೊತಾದಲ್ಲಿ ಪಂದ್ಯ ನಡೆಸಬೇಕಾಗುತ್ತದೆ. ಕೋಲ್ಕೊತಾದಲ್ಲಿ ನಿಗದಿಯಾಗಬೇಕಾಗಿರುವ ಪಂದ್ಯ ಮುಂಬಯಿಗೆ ಬರಲಿದೆ.

ವೇಳಾಪಟ್ಟಿಯಲ್ಲೇನಿದೆ?

ಮಂಗಳವಾರ ಬಿಡುಗಡೆಯಾದ ವೇಳಾಪಟ್ಟಿ ಪ್ರಕಾರ, ಮುಂಬೈನ ವಾಂಖೆಡೆ ಕ್ರೀಡಾಂಗಣವು ಮೊದಲ ಸೆಮಿಫೈನಲ್​​ಗೆ ಆತಿಥ್ಯ ವಹಿಸಿದರೆ, ಕೋಲ್ಕತ್ತಾದ ಈಡನ್ ಗಾರ್ಡನ್ಸ್ ಎರಡನೇ ಸೆಮಿಫೈನಲ್​ಗೆ ಆತಿಥ್ಯ ವಹಿಸಲಿದೆ. ಭದ್ರತಾ ಕಾರಣಗಳನ್ನು ಉಲ್ಲೇಖಿಸಿ ಮುಂಬೈನಲ್ಲಿ ತಮ್ಮ ಯಾವುದೇ ವಿಶ್ವಕಪ್ ನಿಯೋಜಿಸದಂತೆ ಪಿಸಿಬಿ ವಿನಂತಿಸಿದೆ. ಆಗ ಸೆಮಿಫೈನಲ್ ಪಂದ್ಯವನ್ನು ಕೋಲ್ಕತ್ತಾಗೆ ವರ್ಗಾವಣೆ ಮಾಡಬೇಕಾಗುತ್ತದೆ. ಒಂದು ವೇಳೆ ಭಾರತ ಸೆಮಿಫೈನಲ್​ಗೆ ಅರ್ಹತೆ ಪಡೆದರೆ ಪಾಕಿಸ್ತಾನ ವಿರುದ್ಧ ಆಡದ ಹೊರತು ಮುಂಬೈನಲ್ಲೇ ಆಡಲಿದೆ.

ವಿಶ್ವಕಪ್ ವೇಳಾಪಟ್ಟಿಗಾಗಿ ಐಸಿಸಿ ಇನ್ನೂ ಎರಡು ಷರತ್ತುಗಳನ್ನು ಹೊರಡಿಸಿದೆ. ವೆಸ್ಟ್ ಇಂಡೀಸ್ ಅರ್ಹತೆ ಪಡೆದರೆ, ಅರ್ಹತಾ ತಂಡಗಳ ಪೈಕಿ ಕ್ವಾಲಿಫೈಯರ್ 1 ಎಂದು ಹೇಳಲಾಗುತ್ತದೆ. ಒಂದು ವೇಳೆ ಶ್ರೀಲಂಕಾ ತಂಡ ಫೈನಲ್ ಪ್ರವೇಶಿಸಿದರೆ ಕ್ವಾಲಿಫೈಯರ್ 2ರಲ್ಲಿ ಸ್ಥಾನ ಪಡೆಯಲಿದೆ.

ಕ್ಷಣ ಕ್ಷಣದ ಮಾಹಿತಿಗಾಗಿ Vistara News FaceBook ಪೇಜ್ ಫಾಲೋ ಮಾಡಿ
ಮಹತ್ವದ ಮಾಹಿತಿಗಾಗಿ ವಿಸ್ತಾರ ನ್ಯೂಸ್ ಆ್ಯಪ್ ಉಚಿತವಾಗಿ ಡೌನ್ ಲೋಡ್ ಮಾಡಿಕೊಳ್ಳಿ: Andriod App | IOS App
Continue Reading
Click to comment

Leave a Reply

Your email address will not be published. Required fields are marked *

ಕ್ರೀಡೆ

T20 World Cup 2024: ವಿಂಡೀಸ್​ಗೆ ಆಘಾತ; ವಿಶ್ವಕಪ್​ ಟೂರ್ನಿಯಿಂದ ಹೊರಬಿದ್ದ ಕಿಂಗ್

T20 World Cup 2024: ಟೂರ್ನಿಯಿಂದ ಹೊರ ಬಿದ್ದಿರುವ ಕಿಂಗ್​ ಸ್ಥಾನಕ್ಕೆ ಬದಲಿ ಆಟಗಾರನಾಗಿ ಎಡಗೈ ಬ್ಯಾಟರ್​ ಕೈಲ್ ಮೇಯರ್ಸ್(Kyle Mayers) ಅವರನ್ನು ಆಯ್ಕೆ ಮಾಡಲು ಅಂತಾರಾಷ್ಟ್ರೀಯ ಕ್ರಿಕೆಟ್ ಕೌನ್ಸಿಲ್ (ಐಸಿಸಿ) ಅನುಮೋದನೆ ನೀಡಿದೆ.

VISTARANEWS.COM


on

Koo

ಬಾರ್ಬಡೋಸ್​: ಹಾಲಿ ಆವೃತ್ತಿಯ ಟಿ20 ವಿಶ್ವಕಪ್​ ಟೂರ್ನಿಯಲ್ಲಿ(T20 World Cup 2024) ಸೆಮಿಫೈನಲ್​ ಬಾಗಿಲಿಗೆ ಬಂದು ನಿಂತಿರುವ ವಿಂಡೀಸ್​ಗೆ ದೊಡ್ಡ ಆಘಾತವೊಂದು ಎದುರಾಗಿದೆ. ತಂಡದ ಸ್ಟಾರ್​ ಹಾಗೂ ಆರಂಭಿಕ ಆಟಗಾರ ಬ್ರಾಂಡನ್ ಕಿಂಗ್(Brandon King) ಗಾಯಗೊಂಡು ಟೂರ್ನಿಯಿಂದ ಹೊರಬಿದ್ದಿದ್ದಾರೆ. ಮಹತ್ವದ ಹಂತದಲ್ಲಿ ಅವರ ಅಲಭ್ಯತೆ ತಂಡಕ್ಕೆ ಹಿನ್ನಡೆಯಾಗಿ ಪರಿಣಮಿಸುವ ಸಾಧ್ಯತೆ ಇದೆ.

ಟೂರ್ನಿಯಿಂದ ಹೊರ ಬಿದ್ದಿರುವ ಕಿಂಗ್​ ಸ್ಥಾನಕ್ಕೆ ಬದಲಿ ಆಟಗಾರನಾಗಿ ಎಡಗೈ ಬ್ಯಾಟರ್​ ಕೈಲ್ ಮೇಯರ್ಸ್(Kyle Mayers) ಅವರನ್ನು ಆಯ್ಕೆ ಮಾಡಲು ಅಂತಾರಾಷ್ಟ್ರೀಯ ಕ್ರಿಕೆಟ್ ಕೌನ್ಸಿಲ್ (ಐಸಿಸಿ) ಅನುಮೋದನೆ ನೀಡಿದೆ. ಇಂಗ್ಲೆಂಡ್​ ವಿರುದ್ಧದ ಮೊದಲ ಸೂಪರ್​-8 ಪಂದ್ಯದಲ್ಲಿ ಬ್ಯಾಟಿಂಗ್​ ನಡೆಸುವ ವೇಳೆ ಕಿಂಗ್​ ಜಾರಿ ಬಿದ್ದು ಕಾಲಿನ ಗಾಯಕ್ಕೆ ತುತ್ತಾಗಿ ಬಳಿಕ ಪಂದ್ಯವನ್ನು ಅರ್ಧಕ್ಕೆ ಮೊಟಕುಗೊಳಿಸಿದ್ದರು. ಅವರ ಗಾಯದ ಪ್ರಮಾಣ ಗಂಭೀರ ಸ್ವರೂಪದಿಂದ ಕೂಡಿದ್ದು ಹಲವು ತಿಂಗಳ ವಿಶ್ರಾಂತಿ ಬೇಕೆಂದು ವೈದ್ಯರು ಸೂಚನೆ ನೀಡಿದ್ದಾರೆ. ಹೀಗಾಗಿ ಅವರನ್ನು ತಂಡದಿಂದ ಕೈ ಬಿಡಲಾಗಿದೆ. ಇವರ ಸ್ಥಾನಕ್ಕೆ ಆಯ್ಕೆಯಾದ ಕೈಲ್​ ಮೇಯರ್ಸ್​ ಕೂಡ ಆರಂಭಿಕ ಆಟಗಾರನಾಗಿದ್ದಾರೆ. ಕಳೆದ ವರ್ಷ ಐಪಿಎಲ್​ ಟೂರ್ನಿಯಲ್ಲಿ ವಿಸ್ಫೊಟಕ ಬ್ಯಾಟಿಂಗ್​ ಮೂಲಕ ಗಮನ ಸೆಳೆದಿದ್ದರು.

ಇದನ್ನೂ ಓದಿ IND vs BAN: ಕೊಹ್ಲಿ ಬ್ಯಾಟಿಂಗ್​ ಬಗ್ಗೆ ಸ್ವತಃ ಬೇಸರ ವ್ಯಕ್ತಪಡಿಸಿದ ಬ್ಯಾಟಿಂಗ್​ ಕೋಚ್​

ಬ್ರಾಂಡನ್ ಕಿಂಗ್ ಅವರು ಅಲಭ್ಯರಾದ ಕಾರಣ ಇಂದು ನಡೆದ ಅಮೆರಿಕ ವಿರುದ್ಧದ ಪಂದ್ಯದಲ್ಲಿ ಶೈ ಹೋಪ್​ ಅವರು ಆಡುವ ಅವಕಾಶ ಪಡೆದರು. ಸಿಕ್ಕ ಅವಕಾಶವನ್ನು ಎರಡೂ ಕೈಗಳಿಂದ ಬಾಚಿದ ಹೋಪ್​, ಬರೋಬ್ಬರಿ 8 ಸಿಕ್ಸರ್​ ಮತ್ತು 4 ಬೌಂಡರಿ ಬಾರಿಸಿ ಅಜೇಯ 82 ಚಚ್ಚಿ ತಮ್ಮ ಆಯ್ಕೆಯನ್ನು ಸಮರ್ಥಿಸಿಕೊಂಡರು.

ವೆಸ್ಟ್​ ಇಂಡೀಸ್​ ಸೂಪರ್​-8 ಹಂತದಲ್ಲಿ ಸದ್ಯ 2 ಪಂದ್ಯ ಆಡಿ ತಲಾ ಒಂದು ಜಯ ಮತ್ತು ಸೋಲು ಕಂಡು ‘ಬಿ’ ಗ್ರೂಪ್​ನ ಅಂಕಪಟ್ಟಿಯಲ್ಲಿ 2ನೇ ಸ್ಥಾನಿಯಾಗಿದೆ. ಇಂಗ್ಲೆಂಡ್​ ಕೂಡ ಒಂದು ಗೆಲುವು ಮತ್ತು ಒಂದು ಸೋಲು ಕಂಡು ಮೂರನೇ ಸ್ಥಾನಿಯಾಗಿದೆ. ವಿಂಡೀಸ್​ ಅಂತಿಮ ಪಂದ್ಯವನ್ನು ದಕ್ಷಿಣ ಆಫ್ರಿಕಾ ವಿರುದ್ಧ ಆಡಲಿದೆ. ಒಂದೊಮ್ಮೆ ಈ ಪಂದ್ಯ ಸೋತು, ಇಂಗ್ಲೆಂಡ್​ ಅಂತಿಮ ಪಂದ್ಯದಲ್ಲಿ ಗೆದ್ದರೆ ವಿಂಡೀಸ್​ ಟೂರ್ನಿಯಿಂದ ಹೊರಬೀಳಲಿದೆ. ಸೆಮಿ ಫೈನಲ್​ ಪ್ರವೇಶಿಸಬೇಕಿದ್ದರೆ ದಕ್ಷಿಣ ಆಫ್ರಿಕಾ ವಿರುದ್ಧ ಗೆಲ್ಲಲೇ ಬೇಕು.

ವಿಂಡೀಸ್​ ಸೆಮಿ ಆಸೆ ಜೀವಂತ

ಇಲ್ಲಿನ ಕೆನ್ಸಿಂಗ್ಟನ್‌ ಓವಲ್‌ ಸ್ಟೇಡಿಯಂನಲ್ಲಿ ನಡೆದ ಈ ಪಂದ್ಯದಲ್ಲಿ ಟಾಸ್‌ ಗೆದ್ದ ವೆಸ್ಟ್‌ ಇಂಡೀಸ್‌ ಮೊದಲು ಬೌಲಿಂಗ್‌ ಆಯ್ದುಕೊಂಡಿತು. ಆಯ್ಕೆಗೆ ತಕ್ಕ ಬೌಲಿಂಗ್‌ ಪ್ರದಶನ ತೋರುವ ಮೂಲಕ ಅಮೆರಿಕವನ್ನು ಕೇವಲ 128 ರನ್‌ಗಳಿಗೆ ಕಟ್ಟಿಹಾಕಿತು. ಬಳಿಕ ಈ ಸಣ್ಣ ಮೊತ್ತವನ್ನು ಬೆನ್ನಟ್ಟಿದ ವಿಂಡೀಸ್‌ 10.5 ಓವರ್‌ಗಳಲ್ಲಿ ಕೇವಲ ಒಂದು ವಿಕೆಟ್‌ನಷ್ಟಕ್ಕೆ 130 ರನ್‌ ಬಾರಿಸಿ ಭಜರಿ ಗೆಲುವು ತನ್ನದಾಗಿಸಿಕೊಂಡಿತು. ಈ ಗೆಲುವಿನೊಂದಿಗೆ ವಿಂಡೀಸ್​ ಸೆಮಿ ಆಸೆಯನ್ನು ಜೀವಂತವಾಗಿರಿಸಿದೆ.

Continue Reading

ಕ್ರೀಡೆ

IND vs BAN: ಕೊಹ್ಲಿ ಬ್ಯಾಟಿಂಗ್​ ಬಗ್ಗೆ ಸ್ವತಃ ಬೇಸರ ವ್ಯಕ್ತಪಡಿಸಿದ ಬ್ಯಾಟಿಂಗ್​ ಕೋಚ್​

IND vs BAN: ಕೊಹ್ಲಿ ಬ್ಯಾಟಿಂಗ್​ ಬಗ್ಗೆ ಕೇಳಲಾದ ಪ್ರಶ್ನೆಗೆ ಉತ್ತರಿಸಿದ ವಿಕ್ರಮ್ ರಾಥೋರ್, “ಕೊಹ್ಲಿ ಬ್ಯಾಟಿಂಗ್​ ಬಗ್ಗೆ ನನಗೆ ತೃಪ್ತಿಯಿಲ್ಲ. ಮುಂದಿನ ಪಂದ್ಯದಲ್ಲಿ ಕೊಹ್ಲಿ ಉತ್ತಮ ರನ್​ ಗಳಿಸಿದರೆ ನಾನು ಹೆಚ್ಚು ಸಂತಸಪಡುತ್ತೇನೆ. ಟೀಮ್​ ಇಂಡಿಯಾ ಪರ ಹೆಚ್ಚು ಪಂದ್ಯಗಳನ್ನು ಆಡದ ಆಟಗಾರರು ಉತ್ತಮವಾಗಿ ರನ್​ ಗಳಿಸುತ್ತಿದ್ದಾರೆ. ಇದು ಒಳ್ಳೆಯ ವಿಚಾರ” ಎಂದು ಹೇಳಿದರು.

VISTARANEWS.COM


on

IND vs BAN
Koo

ಆ್ಯಂಟಿಗುವಾ: ಹಾಲಿ ಆವೃತ್ತಿಯ ಟಿ20 ವಿಶ್ವಕಪ್​ ಟೂರ್ನಿಯಲ್ಲಿ ವಿರಾಟ್​ ಕೊಹ್ಲಿ(Virat Kohli) ಅವರು ಸತತ ಬ್ಯಾಟಿಂಗ್​ ವೈಫಲ್ಯ ಎದುರಿಸುತ್ತಿರುವ ಬಗ್ಗೆ ಟೀಮ್​ ಇಂಡಿಯಾದ ಬ್ಯಾಟಿಂಗ್​ ಕೋಚ್(India batting coach)​ ವಿಕ್ರಮ್ ರಾಥೋರ್(Vikram Rathour) ಬೇಸರ ವ್ಯಕ್ತಪಡಿಸಿದ್ದಾರೆ. ಕೊಹ್ಲಿಯ ಬ್ಯಾಟಿಂಗ್​ ಕಂಡು ಅತೀವ ಬೇಸರ ತಂದೊಡ್ಡಿದೆ ಎಂದು ಹೇಳಿದ್ದಾರೆ.

ಕೊಹ್ಲಿ ಬ್ಯಾಟಿಂಗ್​ ಬಗ್ಗೆ ಕೇಳಲಾದ ಪ್ರಶ್ನೆಗೆ ಉತ್ತರಿಸಿದ ವಿಕ್ರಮ್ ರಾಥೋರ್, “ಕೊಹ್ಲಿ ಬ್ಯಾಟಿಂಗ್​ ಬಗ್ಗೆ ನನಗೆ ತೃಪ್ತಿಯಿಲ್ಲ. ಮುಂದಿನ ಪಂದ್ಯದಲ್ಲಿ ಕೊಹ್ಲಿ ಉತ್ತಮ ರನ್​ ಗಳಿಸಿದರೆ ನಾನು ಹೆಚ್ಚು ಸಂತಸಪಡುತ್ತೇನೆ. ಟೀಮ್​ ಇಂಡಿಯಾ ಪರ ಹೆಚ್ಚು ಪಂದ್ಯಗಳನ್ನು ಆಡದ ಆಟಗಾರರು ಉತ್ತಮವಾಗಿ ರನ್​ ಗಳಿಸುತ್ತಿದ್ದಾರೆ. ಇದು ಒಳ್ಳೆಯ ವಿಚಾರ” ಎಂದು ಹೇಳಿದರು.

ಕೊಹ್ಲಿಯನ್ನು ಆರಂಭಿಕನಾಗಿ ಆಡಿಸಿದ್ದು ಕೂಡ ಅವರ ಬ್ಯಾಟಿಂಗ್​ ವೈಫಲ್ಯಕ್ಕೆ ಕಾರಣವಿರಬಹುದು. ಕೆಲ ವರ್ಷಗಳಿಂದ ಐಪಿಎಲ್​ನಲ್ಲಿ ಕೊಹ್ಲಿ ಆರಂಭಿಕನಾಗಿ ಆಡಿದ್ದರೂ ಕೂಡ ಐಸಿಸಿ ಟೂರ್ನಿಯಲ್ಲಿ ಇದುವರೆಗೂ ಆಡಿರಲಿಲ್ಲ. ಶೈನಿಂಗ್​ ಬಾಲ್​ನಲ್ಲಿ ಅವರಿಗೆ ಆಡಿದ ಅನುಭವ ಕೂಡ ಅಷ್ಟಾಗಿ ಇಲ್ಲ. ಏನಿದ್ದರೂ ಅವರು ಹೆಚ್ಚು ಸಕ್ಸನ್​ ಕಂಡಿರುವುದು ಮಧ್ಯಮ ಕ್ರಮಾಂಕದಲ್ಲಿ.

ಇದನ್ನೂ ಓದಿ Virat Kohli: ಶ್ರೀಲಂಕಾದ ಮಾಜಿ ಆಟಗಾರನ ವಿಶ್ವ ದಾಖಲೆ ಮೇಲೆ ಕಣ್ಣಿಟ್ಟ ಕಿಂಗ್​ ಕೊಹ್ಲಿ

ಸ್ಲೋ ಪಿಚ್​ ಕೂಡ ಕಾರಣ?

ಟಿ20 ವಿಶ್ವಕಪ್​ಗೆ ತಂಡ ಪ್ರಕಟಿಸುವ ಮುನ್ನವೇ ಅಮೆರಿಕ ಮತ್ತು ವಿಂಡೀಸ್​ ಪಿಚ್​ಗಳು ನಿಧಾನಗತಿಯದ್ದಾಗಿದ್ದು, ಕೊಹ್ಲಿಗೆ ಇದು ಸೂಕ್ತವಲ್ಲ ಎನ್ನುವ ಚರ್ಚೆಗಳು ಕೂಡ ನಡೆದಿತ್ತು. ಅಲ್ಲದೆ ಅವರನ್ನು ಆಯ್ಕೆ ಮಾಡುವುದು ಅನುಮಾನ ಎನ್ನಲಾಗಿತ್ತು. ಆದರೆ, ಸ್ಟಾರ್​ ಆಟಗಾರನನ್ನು ಕೈ ಬಿಟ್ಟರೆ ಬಿಸಿಸಿಐ ವಿರುದ್ಧ ಭಾರೀ ಟೀಕೆ ಮತ್ತು ವಿರೋಧ ವ್ಯಕ್ತವಾಗುವ ನಿಟ್ಟಿನಲ್ಲಿ ಅವರಿಗೆ ಅವಕಾಶ ನೀಡಲಾಗಿತ್ತು. ಇದೀಗ ಕೊಹ್ಲಿಯ ಬ್ಯಾಟಿಂಗ್​ ವೈಫಲ್ಯಕ್ಕೆ ನಿಧಾನಗತಿಯ ಪಿಚ್ ಕೂಡ ಕಾರಣವಾಗಿರಬಹುದು.

ವಿಶ್ವ ದಾಖಲೆ ಸನಿಹ ಕೊಹ್ಲಿ


ಇಂದು ನಡೆಯುವ ಟಿ20 ವಿಶ್ವಕಪ್​ನ(T20 World Cup 2024) ಸೂಪರ್​-8 ಪಂದ್ಯದಲ್ಲಿ(IND vs BAN Super 8 Match) ಬಾಂಗ್ಲಾದೇಶ(IND vs BAN) ವಿರುದ್ಧ ಕೊಹ್ಲಿ 8 ಬೌಂಡರಿ ಬಾರಿಸಿದರೆ, ಟಿ20 ವಿಶ್ವಕಪ್​ ಟೂರ್ನಿಯಲ್ಲಿ ಅತ್ಯಧಿಕ ಬೌಂಡರಿ(most fours in T20 World Cup) ಬಾರಿಸಿರುವ ಶ್ರೀಲಂಕಾದ ಮಾಜಿ ಆಟಗಾರ ಮಹೇಲಾ ಜಯವರ್ಧನೆ(Mahela Jayawardene) ದಾಖಲೆಯನ್ನು ಮುರಿಯಲಿದ್ದಾರೆ. ಜಯವರ್ಧನೆ 31 ಟಿ20 ವಿಶ್ವಕಪ್​ ಪಂದ್ಯಗಳನ್ನಾಡಿ 111 ಬೌಂಡರಿ ಬಾರಿಸಿ ಸದ್ಯ ಅಗ್ರಸ್ಥಾನದಲ್ಲಿದ್ದಾರೆ. ಕೊಹ್ಲಿ ಸದ್ಯ 104* ಬೌಂಡರಿ ಬಾರಿಸಿ ದ್ವಿತೀಯ ಸ್ಥಾನಿಯಾಗಿದ್ದಾರೆ.

Continue Reading

ಕ್ರಿಕೆಟ್

Virat Kohli: ಶ್ರೀಲಂಕಾದ ಮಾಜಿ ಆಟಗಾರನ ವಿಶ್ವ ದಾಖಲೆ ಮೇಲೆ ಕಣ್ಣಿಟ್ಟ ಕಿಂಗ್​ ಕೊಹ್ಲಿ

Virat Kohli: ವಿರಾಟ್​ ಕೊಹ್ಲಿ ಬಾಂಗ್ಲಾ ಎದುರಿನ ಪಂದ್ಯದಲ್ಲಿ 8 ಬೌಂಡರಿ ಬಾರಿಸಿದರೆ, ಟಿ20 ವಿಶ್ವಕಪ್​ ಟೂರ್ನಿಯಲ್ಲಿ ಅತ್ಯಧಿಕ ಬೌಂಡರಿ(most fours in T20 World Cup) ಬಾರಿಸಿರುವ ಶ್ರೀಲಂಕಾದ ಮಾಜಿ ಆಟಗಾರ ಮಹೇಲಾ ಜಯವರ್ಧನೆ(Mahela Jayawardene) ದಾಖಲೆಯನ್ನು ಮುರಿಯಲಿದ್ದಾರೆ.

VISTARANEWS.COM


on

Virat Kohli
Koo

ಆ್ಯಂಡಿಗುವಾ: ಭಾರತ ತಂಡ ಇಂದು ನಡೆಯುವ ಟಿ20 ವಿಶ್ವಕಪ್​ನ(T20 World Cup 2024) ಸೂಪರ್​-8 ಪಂದ್ಯದಲ್ಲಿ(IND vs BAN Super 8 Match) ಬಾಂಗ್ಲಾದೇಶದ ಸವಾಲು ಎದುರಿಸಲಿದೆ. ಈ ಪಂದ್ಯದಲ್ಲಿ ವಿರಾಟ್​ ಕೊಹ್ಲಿ(Virat Kohli) ಅವರು ವಿಶ್ವ ದಾಖಲೆಯೊಂದನ್ನು ನಿರ್ಮಿಸುವ ಸನಿಹದಲ್ಲಿದ್ದಾರೆ. ಕಳೆದ 4 ಪಂದ್ಯಗಳಲ್ಲಿ ಘೋರ ಬ್ಯಾಟಿಂಗ್​ ವೈಫಲ್ಯ ಎದುರಿಸಿದ್ದ ಕೊಹ್ಲಿ ಈ ಪಂದ್ಯದಲ್ಲಿ ನಿರೀಕ್ಷಿತ ಬ್ಯಾಟಿಂಗ್​ ಪ್ರದರ್ಶಿಸುವ ಆತ್ಮವಿಶ್ವಾಸದಲ್ಲಿದ್ದಾರೆ.

ವಿರಾಟ್​ ಕೊಹ್ಲಿ ಬಾಂಗ್ಲಾ ಎದುರಿನ ಪಂದ್ಯದಲ್ಲಿ 8 ಬೌಂಡರಿ ಬಾರಿಸಿದರೆ, ಟಿ20 ವಿಶ್ವಕಪ್​ ಟೂರ್ನಿಯಲ್ಲಿ ಅತ್ಯಧಿಕ ಬೌಂಡರಿ(most fours in T20 World Cup) ಬಾರಿಸಿರುವ ಶ್ರೀಲಂಕಾದ ಮಾಜಿ ಆಟಗಾರ ಮಹೇಲಾ ಜಯವರ್ಧನೆ(Mahela Jayawardene) ದಾಖಲೆಯನ್ನು ಮುರಿಯಲಿದ್ದಾರೆ. ಜಯವರ್ಧನೆ 31 ಟಿ20 ವಿಶ್ವಕಪ್​ ಪಂದ್ಯಗಳನ್ನಾಡಿ 111 ಬೌಂಡರಿ ಬಾರಿಸಿ ಸದ್ಯ ಅಗ್ರಸ್ಥಾನದಲ್ಲಿದ್ದಾರೆ. ಕೊಹ್ಲಿ ಸದ್ಯ 104* ಬೌಂಡರಿ ಬಾರಿಸಿ ದ್ವಿತೀಯ ಸ್ಥಾನಿಯಾಗಿದ್ದಾರೆ.

ಇದನ್ನೂ ಓದಿ IND vs BAN: ಇಂದಿನ ಪಂದ್ಯಕ್ಕೆ ಟೀಮ್​ ಇಂಡಿಯಾದಲ್ಲಿ ಒಂದು ಮಹತ್ವದ ಬದಲಾವಣೆ

ಅತ್ಯಧಿಕ ಬೌಂಡರಿ ಬಾರಿದ ಬ್ಯಾಟರ್​ಗಳು

ಆಟಗಾರದೇಶಇನಿಂಗ್ಸ್​ಬೌಂಡರಿ
ಮಹೇಲಾ ಜಯವರ್ಧನೆಶ್ರೀಲಂಕಾ31111
ವಿರಾಟ್ ಕೊಹ್ಲಿಭಾರತ31104*
ತಿಲಕರತ್ನೆ ದಿಲ್ಶನ್ಶ್ರೀಲಂಕಾ35101
ಡೇವಿಡ್​ ವಾರ್ನರ್ಆಸ್ಟ್ರೇಲಿಯಾ3897*
ರೋಹಿತ್​ ಶರ್ಮ​ಭಾರತ4397*
ಜಾಸ್​ ಬಟ್ಲರ್​ಇಂಗ್ಲೆಂಡ್3381*
ಕ್ರಿಸ್​ ಗೇಲ್​​ವೆಸ್ಟ್​ ಇಂಡೀಸ್​3178
ಕೇನ್​ ವಿಲಿಯಮ್ಸನ್​ನ್ಯೂಜಿಲ್ಯಾಂಡ್​2971*
ಬ್ರೆಂಡನ್ ಮೆಕಲಮ್ನ್ಯೂಜಿಲ್ಯಾಂಡ್2567
ಕುಮಾರ್ ಸಂಗಕ್ಕಾರಶ್ರೀಲಂಕಾ3163

ಐಪಿಎಲ್​ ಟೂರ್ನಿಯಲ್ಲಿ ಕೊಹ್ಲಿ 700ಕ್ಕೂ ಅಧಿಕ ರನ್​ ಗಳಿಸಿ ಟೂರ್ನಿಯಲ್ಲೇ ಗರಿಷ್ಠ ರನ್​ ಗಳಿಸಿದ ಆಟಗಾರ ಎನಿಸಿಕೊಂಡಿದ್ದರು. ಆದರೆ, ಈ ಯಶಸ್ಸು ಕೊಹ್ಲಿಗೆ ಟಿ20 ವಿಶ್ವಕಪ್​ ಟೂರ್ನಿಯಲ್ಲಿ ಕೈ ಹಿಡಿಯಲಿಲ್ಲ. ಇಂದು ನಡೆಯುವ ಬಾಂಗ್ಲಾ ವಿರುದ್ಧದ ಪಂದ್ಯದಲ್ಲಿ ಕೊಹ್ಲಿ ತಮ್ಮ ಎಂದಿನ ಬ್ಯಾಟಿಂಗ್​ ಕ್ರಮಾಂಕ 3ನೇ ಸ್ಥಾನದಲ್ಲೇ ಆಡುವ ಸಾಧ್ಯತೆ ಇದೆ. ಯಶಸ್ವಿ ಜೈಸ್ವಾಲ್​ ಈ ಪಂದ್ಯದಲ್ಲಿ ಶಿವಂ ದುಬೆ ಸ್ಥಾನಕ್ಕೆ ತಂಡಕ್ಕೆ ಆಯ್ಕೆಯಾಗುವ ನಿರೀಕ್ಷೆ ಇದೆ. ಬಾಂಗ್ಲಾ ವಿರುದ್ಧ ಕೊಹ್ಲಿ ಉತ್ತಮ ಬ್ಯಾಟಿಂಗ್​ ಎಕಾನಮಿ ಕೂಡ ಹೊಂದಿದ್ದಾರೆ.

ಇಂದಿನ ಪಂದ್ಯಕ್ಕೆ ಯಾವುದೇ ಮಳೆ ಭೀತಿ ಎದುರಾಗಿಲ್ಲ. ಹೀಗಾಗಿ ಅಭಿಮಾನಿಗಳು ಪಂದ್ಯವನ್ನು ಸಂಪೂರ್ಣವಾಗಿ ಕಣ್ತುಂಬಿಕೊಳ್ಳಬಹುದು. ಹವಾಮಾನ ಇಲಾಖೆ ವರದಿ ಪ್ರಕಾರ, ಪಂದ್ಯ ನಡೆಯುವ ವೇಳೆ ತಾಪಮಾನವು 37 ಡಿಗ್ರಿ ಸೆಲ್ಸಿಯಸ್ ಇರಲಿದೆ ಎಂದು ತಿಳಿಸಿದೆ. ಮಳೆಯಾಗುವ ಸಾಧ್ಯತೆ ಶೇ.1ರಷ್ಟಿದೆ. ತೇವಾಂಶವು 68% ಆಗಿರುತ್ತದೆ. ಭಾರತದಲ್ಲಿ ಈ ಪಂದ್ಯ ರಾತ್ರಿ ಪ್ರಸಾರಗೊಳ್ಳಲಿದೆ. ಈ ಕ್ರೀಡಾಂಗಣದಲ್ಲಿ ಒಟ್ಟು 34 ಟಿ 20 ಪಂದ್ಯಗಳಿಗೆ ಆತಿಥ್ಯ ವಹಿಸಿದೆ. ಮೊದಲು ಬ್ಯಾಟಿಂಗ್ ಮಾಡಿದ ತಂಡಗಳು 16 ಪಂದ್ಯಗಳನ್ನು ಗೆದ್ದಿದೆ.

Continue Reading

ಕ್ರೀಡೆ

IND vs BAN: ಇಂದಿನ ಪಂದ್ಯಕ್ಕೆ ಟೀಮ್​ ಇಂಡಿಯಾದಲ್ಲಿ ಒಂದು ಮಹತ್ವದ ಬದಲಾವಣೆ

IND vs BNG: ನಾಯಕ ರೋಹಿತ್​ ಮತ್ತು ಕೊಹ್ಲಿ(Virat Kohli) ಜೋಡಿ ಆಡಿದ ಎಲ್ಲ ಪಂದ್ಯಗಳಲ್ಲಿಯೂ ವಿಫಲರಾಗಿದ್ದಾರೆ. ಹೀಗಾಗಿ ಕೊಹ್ಲಿ ಬದಲು ರೋಹಿತ್​ ಮತ್ತು ಜೈಸ್ವಾಲ್​ ಆರಂಭಿಕರಾಗಿ ಆಡುವ ಸಾಧ್ಯತೆ ಇದೆ. ಜೈಸ್ವಾಲ್​ ವಿಂಡೀಸ್​ ನೆಲದಲ್ಲಿ ಉತ್ತಮ ಬ್ಯಾಟಿಂಗ್​ ದಾಖಲೆ ಕೂಡ ಹೊಂದಿದ್ದಾರೆ.

VISTARANEWS.COM


on

IND vs BAN
Koo

ಆ್ಯಂಟಿಗುವಾ: ಬಾಂಗ್ಲಾದೇಶ(IND vs BAN) ವಿರುದ್ಧ ಇಂದು ನಡೆಯುವ ಸೂಪರ್​-8 ಪಂದ್ಯಕ್ಕೆ ಟೀಮ್​ ಇಂಡಿಯಾ ತನ್ನ ಆಡುವ ಬಳಗದಲ್ಲಿ ಮಹತ್ವದ ಬದಲಾವಣೆ ಮಾಡುವ ಸಾಧ್ಯತೆ ಇದೆ. ಕಳೆದ ಪಂದ್ಯದಲ್ಲಿ ಮೊಹಮ್ಮದ್​ ಸಿರಾಜ್​ ಅವರನ್ನು ಕೈ ಬಿಟ್ಟು ಅವರ ಸ್ಥಾನದಲ್ಲಿ ಕುಲ್​ದೀಪ್​ಗೆ ಅವಕಾಶ ನೀಡಲಾಗಿತ್ತು. ಇದೀಗ ಬಾಂಗ್ಲಾ ಎದುರಿನ ಪಂದ್ಯದಲ್ಲಿ ಶಿವಂ ದುಬೆ(Shivam Dube) ಅವರನ್ನು ಬೆಂಚ್​ ಕಾಯಿಸುವುದು ಬಹುತೇಖ ಖಚಿತ ಎನ್ನುತ್ತಿವೆ ಮೂಲಗಳು.

ಐಪಿಎಲ್​​ನ ಆರಂಭಿಕ ಕೆಲ ಪಂದ್ಯಗಳಲ್ಲಿ ಸತತವಾಗಿ ಬಿರುಸಿನ ಬ್ಯಾಟಿಂಗ್​ ಮೂಲಕ ಅರ್ಧಶತಕ ಬಾರಿಸಿ ಗಮನಸೆಳೆದಿದ್ದ ದುಬೆ, ಟಿ20 ವಿಶ್ವಕಪ್​ನಲ್ಲಿ ರನ್​ ಗಳಿಸಲು ಪರದಾಟ ನಡೆಸುತ್ತಿದ್ದಾರೆ. ಆಡಿದ ಎಲ್ಲ ಪಂದ್ಯಗಳಲ್ಲಿಯೂ ವೈಫಲ್ಯ ಕಂಡಿದ್ದಾರೆ. ಹೀಗಾಗಿ ಇವರನ್ನು ಕೈ ಬಿಟ್ಟು ಹೊಡಿ-ಬಡಿ ಆಟಕ್ಕೆ ಹೆಸರುವಾಸಿಯಾಗಿರುವ ಸಂಜು ಸ್ಯಾಮ್ಸನ್​ ಅಥವಾ ಯಶಸ್ವಿ ಜೈಸ್ವಾಲ್(Yashasvi Jaiswal)​ ಅವರನ್ನು ಆಡಿಸುವ ಸಾಧ್ಯತೆ ಇದೆ.

ಮೂಲಗಳ ಪ್ರಕಾರ ಯಶಸ್ವಿ ಜೈಸ್ವಾಲ್​ಗೆ ಇಂದಿನ ಪಂದ್ಯದಲ್ಲಿ ಅವಕಾಶ ಸಿಗುವುದು ಖಚಿತ ಎನ್ನಲಾಗಿತ್ತಿದೆ. ಏಕೆಂದರೆ ತಂಡ ಪವರ್‌ ಪ್ಲೇಯಲ್ಲಿ ನಿರೀಕ್ಷಿತ ಆರಂಭ ಪಡೆಯಲು ವಿಫ‌ಲವಾಗುತ್ತಿದೆ. ನಾಯಕ ರೋಹಿತ್​ ಮತ್ತು ಕೊಹ್ಲಿ(Virat Kohli) ಜೋಡಿ ಆಡಿದ ಎಲ್ಲ ಪಂದ್ಯಗಳಲ್ಲಿಯೂ ವಿಫಲರಾಗಿದ್ದಾರೆ. ಹೀಗಾಗಿ ಕೊಹ್ಲಿ ಬದಲು ರೋಹಿತ್​ ಮತ್ತು ಜೈಸ್ವಾಲ್​ ಆರಂಭಿಕರಾಗಿ ಆಡುವ ಸಾಧ್ಯತೆ ಇದೆ. ಜೈಸ್ವಾಲ್​ ವಿಂಡೀಸ್​ ನೆಲದಲ್ಲಿ ಉತ್ತಮ ಬ್ಯಾಟಿಂಗ್​ ದಾಖಲೆ ಕೂಡ ಹೊಂದಿದ್ದಾರೆ. ತಮ್ಮ ಚೊಚ್ಚಲ ಟೆಸ್ಟ್​ನಲ್ಲಿಯೇ ಶತಕ ಬಾರಿಸಿ ಮಿಂಚಿದ್ದರು. ಹಕವು ಮಾಜಿ ಆಟಗಾರರು ಕೂಡ ಕೊಹ್ಲಿಯನ್ನು ಆರಂಭಿಕನಾಗಿ ಆಡಿಸುವುದು ಸೂಕ್ತವಲ್ಲ ಎಂದು ಹೇಳಿದ್ದಾರೆ. ಹಾಗಾಗಿ ಜೈಸ್ವಾಲ್​ ಅವಕಾಶ ಪಡೆಯಬಹುದು.

ಸಿರಾಜ್‌ ಬದಲು ಕುಲದೀಪ್‌ ಅವರನ್ನು ಆಡಿಸಿದ ಪ್ರಯೋಗ ಯಶಸ್ವಿಯಾಗಿದೆ. ಹೀಗಾಗಿ ಸಿರಾಜ್​ ಈ ಪಂದ್ಯದಲ್ಲಿಯೂ ಬೆಂಚ್​ ಕಾಯಬೇಕಾಗಬಹುದು. ರಿಷಭ್​ ಪಂತ್​ಗೆ ಬ್ಯಾಕ್​ ಅಪ್​ ಕೀಪರ್ ಆಗಿ ತಂಡದಲ್ಲಿ ಸ್ಥಾನ ಪಡೆದಿರುವ​ ಸಂಜುಗೆ ಅವಕಾಶ ಸಿಗುವುದು ಅನುಮಾನ. ಏಕೆಂದರೆ, ಸಂಜು ಆಡಿ ಒಂದೊಮ್ಮೆ​ ಗಾಯಗೊಂಡರೆ ತಂಡದಲ್ಲಿ ಬೇರೆ ಮೀಸಲು ಕೀಪರ್​ ಇಲ್ಲ. ಹೀಗಾಗಿ ಮುಂಜಾಗ್ರತಾ ಕ್ರಮವಾಗಿ ಸಂಜು ಆಡಿಸುವುದು ಕಷ್ಟ ಸಾಧ್ಯ.

ಇದನ್ನೂ ಓದಿ IND vs BAN: ಇಂದು ಭಾರತ-ಬಾಂಗ್ಲಾ ಸೂಪರ್​-8 ಸೆಣಸಾಟ; ಪಂದ್ಯಕ್ಕೆ ಮಳೆ ಭೀತಿ ಇದೆಯೇ?

ಸಂಭಾವ್ಯ ತಂಡ


ರೋಹಿತ್​ ಶರ್ಮ, ಯಶಸ್ವಿ ಜೈಸ್ವಾಲ್​, ವಿರಾಟ್‌ ಕೊಹ್ಲಿ, ರಿಷಭ್‌ ಪಂತ್‌, ಸೂರ್ಯಕುಮಾರ್‌ ಯಾದವ್, ಹಾರ್ದಿಕ್‌ ಪಾಂಡ್ಯ, ರವೀಂದ್ರ ಜಡೇಜಾ, ಅಕ್ಷರ್‌ ಪಟೇಲ್, ಜಸ್​ಪ್ರೀತ್​ ಬುಮ್ರಾ, ಕುಲದೀಪ್​ ಯಾದವ್, ಅರ್ಶ್‌ದೀಪ್‌ ಸಿಂಗ್.

ಮಳೆ ಭೀತಿ ಇಲ್ಲ


ಹವಾಮಾನ ವರದಿಗಳ ಪ್ರಕಾರ, ಶನಿವಾರ ಈ ಸ್ಥಳದ ತಾಪಮಾನವು ಹಗಲಿನಲ್ಲಿ 37 ಡಿಗ್ರಿ ಸೆಲ್ಸಿಯಸ್ ಮತ್ತು ರಾತ್ರಿ 27 ಡಿಗ್ರಿ ಸೆಲ್ಸಿಯಸ್ ಗೆ ಇಳಿಯುತ್ತದೆ. ಮಧ್ಯಾಹ್ನ ಸ್ವಲ್ಪ ಮೋಡ ಕವಿದ ವಾತಾವರಣ ಕಂಡು ಬಂದರೂ ಕೂಡ ಮಳೆಯಾಗುವ ಸಾಧ್ಯತೆ ಶೇ.1ರಷ್ಟಿದೆ. ತೇವಾಂಶವು 68% ಆಗಿರುತ್ತದೆ. ಭಾರತದಲ್ಲಿ ಈ ಪಂದ್ಯ ರಾತ್ರಿ ಪ್ರಸಾರಗೊಳ್ಳಲಿದೆ. ಈ ಕ್ರೀಡಾಂಗಣದಲ್ಲಿ ಒಟ್ಟು 34 ಟಿ 20 ಪಂದ್ಯಗಳಿಗೆ ಆತಿಥ್ಯ ವಹಿಸಿದೆ. ಮೊದಲು ಬ್ಯಾಟಿಂಗ್ ಮಾಡುವ ತಂಡಗಳು 16 ಪಂದ್ಯಗಳನ್ನು ಗೆದ್ದಿದ್ದರೆ, ಎರಡನೇ ಬ್ಯಾಟಿಂಗ್ ಮಾಡುವ ತಂಡಗಳು 16 ಪಂದ್ಯಗಳನ್ನು ಗೆದ್ದಿವೆ.

Continue Reading
Advertisement
ಕ್ರೀಡೆ1 min ago

T20 World Cup 2024: ವಿಂಡೀಸ್​ಗೆ ಆಘಾತ; ವಿಶ್ವಕಪ್​ ಟೂರ್ನಿಯಿಂದ ಹೊರಬಿದ್ದ ಕಿಂಗ್

PGCET 2024
ಶಿಕ್ಷಣ2 mins ago

PGCET 2024 : ಪಿಜಿಸಿಇಟಿ ಅಪ್‌ಡೇಟ್ಸ್‌ ; ಶುಲ್ಕ ಪಾವತಿ, ತಿದ್ದುಪಡಿ, ಪರೀಕ್ಷಾ ಕೇಂದ್ರ ಆಯ್ಕೆಗೆ ಜೂ.24 ಕೊನೆ ದಿನ

The Lion King 30 years influence on fans and actors
ಬಾಲಿವುಡ್3 mins ago

The Lion King: ಆಲ್‌ ಟೈಮ್‌ ಫೇವರೇಟ್‌ ಕಾರ್ಟೂನ್‌ `ದಿ ಲಯನ್ ಕಿಂಗ್’ 30ನೇ ವಾರ್ಷಿಕೋತ್ಸವ

Viral Video
ವೈರಲ್ ನ್ಯೂಸ್7 mins ago

Viral Video: ಕಾರು ತಡೆದ ಟ್ರಾಫಿಕ್‌ ಪೊಲೀಸ್‌ ಕ್ಯಾಬ್‌ ಡ್ರೈವರ್‌ ಮಾಡಿದ್ದೇನು ಗೊತ್ತಾ?

Floods In Assam
ದೇಶ10 mins ago

Floods In Assam: ಭೀಕರ ಪ್ರವಾಹಕ್ಕೆ ನಲುಗಿದ ಅಸ್ಸಾಂ; 37ಕ್ಕೆ ಏರಿದ ಸಾವಿನ ಸಂಖ್ಯೆ

Actor Darshan
ಕರ್ನಾಟಕ11 mins ago

Actor Darshan: ದರ್ಶನ್ ಸೇರಿ ನಾಲ್ವರು ಸ್ಟೇಷನ್‌ನಿಂದ ಪರಪ್ಪನ ಅಗ್ರಹಾರ ಜೈಲಿಗೆ

Swamji Murder
ಪ್ರಮುಖ ಸುದ್ದಿ27 mins ago

Swamji Murder : ಆಸ್ತಿ, ಅಧಿಕಾರಕ್ಕಾಗಿ ಗಲಾಟೆ; ಸ್ವಾಮೀಜಿಯೊಬ್ಬರನ್ನು ಕೊಲೆ ಮಾಡಿದ ಸ್ವಾಮೀಜಿಗಳ ಗುಂಪು

Child Death
ಬೆಳಗಾವಿ33 mins ago

Child Death : ಮಕ್ಕಳ ಮಾರಾಟ ಜಾಲದಲ್ಲಿ ರಕ್ಷಣೆಯಾಗಿದ್ದ ಮಗು ಮೃತ್ಯು; ಅಂತ್ಯ ಸಂಸ್ಕಾರ ನೆರವೇರಿಸಿದ ಪೊಲೀಸರು

Shobha Shetty car gift to yashwanth birthday
ಟಾಲಿವುಡ್51 mins ago

Shobha Shetty: ಭಾವಿ ಪತಿಗೆ ಕಾರ್ ಗಿಫ್ಟ್ ನೀಡಿದ ‘ಅಗ್ನಿಸಾಕ್ಷಿ’ ಖ್ಯಾತಿಯ ನಟಿ!

IND vs BAN
ಕ್ರೀಡೆ58 mins ago

IND vs BAN: ಕೊಹ್ಲಿ ಬ್ಯಾಟಿಂಗ್​ ಬಗ್ಗೆ ಸ್ವತಃ ಬೇಸರ ವ್ಯಕ್ತಪಡಿಸಿದ ಬ್ಯಾಟಿಂಗ್​ ಕೋಚ್​

Sharmitha Gowda in bikini
ಕಿರುತೆರೆ9 months ago

Geetha Serial Kannada: ನಿದ್ದೆ ಕದ್ದ ಚೋರಿ! ನಟಿ `ಭಾನುಮತಿ’ ಹಾಟ್‌ ಪೋಟೊಗಳಿಗೆ ಫ್ಯಾನ್ಸ್ ಫುಲ್ ಫಿದಾ

Kannada Serials
ಕಿರುತೆರೆ8 months ago

Kannada Serials TRP: 2ನೇ ಸ್ಥಾನದಲ್ಲಿ 2 ಧಾರಾವಾಹಿಗಳು; ಟಿಆರ್‌ಪಿ ರೇಸ್‌ನಲ್ಲಿಲ್ಲ ಭಾಗ್ಯಲಕ್ಷ್ಮೀ!

Bigg Boss- Saregamapa 20 average TRP
ಕಿರುತೆರೆ8 months ago

Kannada Serials TRP: ಏಳನೇ ಸ್ಥಾನಕ್ಕೆ ʻಅಮೃತಧಾರೆʼ ಕುಸಿತ; ಬಿಗ್‌ ಬಾಸ್‌-ಸರಿಗಮಪ ಟಿಆರ್‌ಪಿ ಎಷ್ಟು?

galipata neetu
ಕಿರುತೆರೆ7 months ago

Kanyadana Serial: ಕಿರುತೆರೆಗೆ ಮತ್ತೆ ಎಂಟ್ರಿ ಕೊಟ್ಟ ʻಗಾಳಿಪಟʼ ಖ್ಯಾತಿಯ ʻನೀತುʼ!

Kannada Serials
ಕಿರುತೆರೆ9 months ago

Kannada Serials TRP: ನಾಲ್ಕನೇ ಸ್ಥಾನಕ್ಕೆ ಕುಸಿತ ಕಂಡ ʻಸೀತಾ ರಾಮʼ; ಟಿಆರ್‌ಪಿ ರೇಸ್‌ಗೆ ʻಭಾಗ್ಯಲಕ್ಷ್ಮಿʼ ಬ್ಯಾಕ್‌!

Kannada Serials
ಕಿರುತೆರೆ9 months ago

Kannada Serials TRP: ಟಿಆರ್‌ಪಿಯಲ್ಲಿ ʻಭಾಗ್ಯಲಕ್ಷ್ಮೀʼ ಹವಾ; ʻಪುಟ್ಟಕ್ಕನ ಮಕ್ಕಳುʼ ಧಾರಾವಾಹಿಗೆ ಸಂಕಷ್ಟ!

Bigg Boss' dominates TRP; Sita Rama fell to the sixth position
ಕಿರುತೆರೆ8 months ago

Kannada Serials TRP: ಟಿಆರ್‌ಪಿಯಲ್ಲಿ ʻಬಿಗ್ ಬಾಸ್ʼದೇ ಮೇಲುಗೈ; 6ನೇ ಸ್ಥಾನಕ್ಕೆ ಕುಸಿದ ʻಸೀತಾ ರಾಮʼ

geetha serial Dhanush gowda engagement
ಕಿರುತೆರೆ6 months ago

Dhanush Gowda: ಗೀತಾ ಧಾರಾವಾಹಿ ನಟನ ನಿಶ್ಚಿತಾರ್ಥ; ಭವ್ಯಾಳ ಕಮೆಂಟ್‌ ಬಾಕ್ಸ್‌ ಆಫ್‌!

varun
ಕಿರುತೆರೆ7 months ago

Brindavana Serial: ʼಬೃಂದಾವನʼ ಧಾರಾವಾಹಿಯಲ್ಲಿ ದೊಡ್ಡ ಟ್ವಿಸ್ಟ್‌; ಪ್ರಮುಖ ಪಾತ್ರಧಾರಿಯೇ ಬದಲು

Kannada Serials
ಕಿರುತೆರೆ9 months ago

Kannada Serials TRP: ಟಿಆರ್‌ಪಿಯಲ್ಲಿ ಏರಿಕೆ ಕಂಡ ʻಅಮೃತಧಾರೆʼ; ʻಗಟ್ಟಿಮೇಳʼಕ್ಕೆ ನಾಲ್ಕನೇ ಸ್ಥಾನ!

karnataka weather Forecast
ಮಳೆ21 hours ago

Karnataka Weather : ರಭಸವಾಗಿ ಹರಿಯುವ ನೀರಲ್ಲಿ ಸಿಲುಕಿದ ಬೊಲೆರೋ; ಬಿರುಗಾಳಿ ಸಹಿತ ಮಳೆ ಎಚ್ಚರಿಕೆ

International Yoga Day 2024
ಕರ್ನಾಟಕ1 day ago

International Yoga Day 2024: ಎಲ್ಲೆಲ್ಲೂ ಯೋಗಾಯೋಗ‌ಕ್ಕೆ ಮಂಡಿಯೂರಿದ ಜನತೆ

Karnataka Weather Forecast
ಮಳೆ2 days ago

Karnataka Weather : ಬಾಗಲಕೋಟೆ, ಬೆಂಗಳೂರು ಸೇರಿ ಚಿಕ್ಕಮಗಳೂರಲ್ಲಿ ಸುರಿದ ಗಾಳಿ ಸಹಿತ ಮಳೆ

Actor Darshan
ಮೈಸೂರು5 days ago

Actor Darshan : ಕೊಲೆ ಕೇಸ್‌ ಬೆನ್ನಲ್ಲೇ ನಟ ದರ್ಶನ್‌ ಸೇರಿ ಪತ್ನಿ ವಿಜಯಲಕ್ಷ್ಮಿಗೆ ಬಾರ್ ಹೆಡೆಡ್ ಗೂಸ್ ಸಂಕಷ್ಟ!

Bakrid 2024
ಬೆಂಗಳೂರು5 days ago

Bakrid 2024 : ಮತ್ತೊಂದು ಧರ್ಮವನ್ನೂ ಪ್ರೀತಿಸಿ; ಬಕ್ರೀದ್‌ ಪ್ರಾರ್ಥನೆಯಲ್ಲಿ ಸಿಎಂ ಸಿದ್ದರಾಮಯ್ಯ ಕರೆ

Renukaswamy murder case The location of the accused is complete
ಸಿನಿಮಾ6 days ago

Renuka Swamy murder : ಭೀಕರವಾಗಿ ಕೊಂದರೂ ಆರೋಪಿಗಳಿಗೆ ಕಾಡುತ್ತಿಲ್ವಾ ಪಾಪಪ್ರಜ್ಞೆ? ನಗುತ್ತಲೇ ಹೊರಬಂದ ಪವಿತ್ರಾ ಗೌಡ, ಪವನ್‌

Renuka swamy murder
ಚಿತ್ರದುರ್ಗ6 days ago

Renuka swamy Murder : ರೇಣುಕಾಸ್ವಾಮಿ ಕುಟುಂಬಸ್ಥರಿಗೆ ಸಾಂತ್ವನ ಹೇಳಿದ ಬಾಳೆಹೊನ್ನೂರು ಶ್ರೀಗಳು

Vijayanagara News
ವಿಜಯನಗರ6 days ago

Vijayanagara News : ಕೆಲಸಕ್ಕೆ ಚಕ್ಕರ್, ಸಂಬಳಕ್ಕೆ ಹಾಜರ್! ಹಾರಕನಾಳು ಗ್ರಾಪಂ ಪಿಡಿಓಗಾಗಿ ಗ್ರಾಮಸ್ಥರ ಹುಡುಕಾಟ

Actor Darshan
ಯಾದಗಿರಿ1 week ago

Actor Darshan : ಬಾಸ್‌ ಅಂತ ಯಾಕ್‌ ಬಕೆಟ್‌ ಹಿಡಿಯುತ್ತೀರಾ ಅಂದವನಿಗೆ ದರ್ಶನ್ ಅಭಿಮಾನಿಯಿಂದ ಜೀವ ಬೆದರಿಕೆ!

Karnataka Weather Forecast
ಮಳೆ1 week ago

Karnataka Weather : ಕರಾವಳಿ, ಉತ್ತರ ಒಳನಾಡಿನಲ್ಲಿ ವರುಣಾರ್ಭಟ; ನಾಳೆಯು ಹಲವೆಡೆ ಸಿಕ್ಕಾಪಟ್ಟೆ ಮಳೆ

ಟ್ರೆಂಡಿಂಗ್‌