Ashes 2023: ಮೊದಲ ದಿನವೇ ಬೃಹತ್​ ಮೊತ್ತ ಪೇರಿಸಿದ ಆಸ್ಟ್ರೇಲಿಯಾ - Vistara News

ಕ್ರಿಕೆಟ್

Ashes 2023: ಮೊದಲ ದಿನವೇ ಬೃಹತ್​ ಮೊತ್ತ ಪೇರಿಸಿದ ಆಸ್ಟ್ರೇಲಿಯಾ

ಇಂಗ್ಲೆಂಡ್​ ವಿರುದ್ಧದ ದ್ವಿತೀಯ ಆ್ಯಶಸ್​ ಟೆಸ್ಟ್​ (Ashes 2023)ಸರಣಿಯ ಮೊದಲ ದಿನದಾಟಕ್ಕೆ ಆಸ್ಟ್ರೇಲಿಯಾ(England vs Australia) ತಂಡ ಬೃಹತ್​ ಮೊತ್ತ ಕಲೆಹಾಕಿದೆ.

VISTARANEWS.COM


on

England vs Australia, 2nd Tes
ಮಹತ್ವದ, ಕುತೂಹಲಕರ ಸುದ್ದಿಗಾಗಿ ಫಾಲೊ ಮಾಡಿ
Koo

ಲಾರ್ಡ್ಸ್​: ಸ್ವೀವನ್​ ಸ್ಮಿತ್​(Steven Smith) ಮತ್ತು ಟ್ರಾವಿಸ್​ ಹೆಡ್​(Travis Head) ಅವರ ಅರ್ಧಶತಕದ ಆಟದ ನೆರವಿನಿಂದ ಇಂಗ್ಲೆಂಡ್​ ವಿರುದ್ಧದ ದ್ವಿತೀಯ ಆ್ಯಶಸ್​ ಟೆಸ್ಟ್​ (Ashes 2023)ಸರಣಿಯ ಮೊದಲ ದಿನದಾಟಕ್ಕೆ ಆಸ್ಟ್ರೇಲಿಯಾ(England vs Australia) ತಂಡ ಬೃಹತ್​ ಮೊತ್ತ ಕಲೆಹಾಕಿದೆ.

ಐತಿಹಾಸಿಕ ಲಾರ್ಡ್ಸ್​ ಸ್ಟೇಡಿಯಂನಲ್ಲಿ ಬುಧವಾರ ಆರಂಭಗೊಂಡ ಈ ಟೆಸ್ಟ್​ನಲ್ಲಿ ಟಾಸ್​ ಸೋತು ಬ್ಯಾಟಿಂಗ್​ ಆಹ್ವಾನ ಪಡೆದ ಆಸ್ಟ್ರೇಲಿಯಾ 5 ವಿಕೆಟ್​ನಷ್ಟಕ್ಕೆ 339 ರನ್​ ಗಳಿಸಿದೆ. ಆಸೀಸ್​ ಪರ ಇನಿಂಗ್ಸ್​ ಆರಂಭಿಸಿದ ಡೇವಿಡ್​ ವಾರ್ನರ್​(66)(David Warner) ಅರ್ಧಶತಕ ಬಾರಿಸುವು ಮೂಲಕ ಒತ್ತಮ ಆರಂಭ ಒದಗಿಸಿದರು. ಆದರೆ ಇವರ ಜತೆಗಾರ ಹಾಗೂ ಮೊದಲ ಪಂದ್ಯದ ಶತಕ ವೀರ ಉಸ್ಮಾನ್​ ಖವಾಜ(Usman Khawaja) 17 ರನ್​ಗೆ ಔಟಾಗಿ ಈ ಪಂದ್ಯದಲ್ಲಿ ನಿರಾಸೆ ಮೂಡಿಸಿದರು. ಆ ಬಳಿಕ ಕ್ರೀಸ್​ಗೆ ಬಂದ ಮಾರ್ನಸ್​ ಲುಬುಶೇನ್(Marnus Labuschagne) 47 ರನ್​ ಗಳಿಸಿ ಔಟಾದರು. ಈ ಮೂಲಕ ಕೇವಲ ಮೂರು ರನ್​ ಅಂತರದಿಂದ ಅರ್ಧಶತಕ ಬಾರಿಸುವ ಅವಕಾಶವೊಂದನ್ನು ಕಳೆದುಕೊಂಡರು​.

ಇದನ್ನೂ ಓದಿ AUS VS SA | ಶತಕ ಬಾರಿಸಿ ಡಾನ್‌ ಬ್ರಾಡ್‌ಮನ್‌ ದಾಖಲೆ ಮುರಿದ ಸ್ವೀವನ್​ ಸ್ಮಿತ್​!

ಸ್ಮಿತ್​-ಹೆಟ್​ ಉತ್ತಮ ಜತೆಯಾಟ

ಭಾರತ ವಿರುದ್ಧದ ಐಸಿಸಿ ವಿಶ್ವ ಟೆಸ್ಟ್​ ಚಾಂಪಿಯನ್​ಶಿಪ್​ ಫೈನಲ್​ ಪಂದ್ಯದಲ್ಲಿ ದಾಖಲೆಯ ಜತೆಯಾಟ ನಡೆಸಿದ್ದ ಸ್ಟೀವನ್​ ಸ್ಮಿತ್​ ಮತ್ತು ಟ್ರಾವಿಸ್​ ಹೆಡ್​ ಇಂಗ್ಲೆಂಡ್​ ವಿರುದ್ದವೂ ಉತ್ತಮ ಜತೆಯಾಟ ನಡೆಸಿತು. 4 ವಿಕೆಟ್​ಗೆ 118 ರನ್​ಗಳ ಅತ್ಯಮೂಲ್ಯ ಕೊಡುಗೆ ನೀಡಿದರು. ಉತ್ತಮವಾಗಿ ಆಡುತ್ತಿದ್ದ ಈ ಜೋಡಿಯನ್ನು ಜೋ ರೂಟ್​ ಬೇರ್ಪಡಿಸುವಲ್ಲಿ ಯಶಸ್ವಿಯಾದರು. 77 ರನ್​ ಗಳಿಸಿ ಹೆಟ್​ ಆಟ ಮುಗಿಸಿದರು. ಈ ವಿಕೆಟ್​ ಪತನದ ಬೆನ್ನಲ್ಲೇ ಕ್ರೀಸ್​ಗಿಳಿದ ಕ್ಯಾಮರೂನ್​ ಗ್ರೀನ್​ ಖಾತೆ ತೆರೆಯುವ ಮುನ್ನವೇ ಪೆವಿಲಿಯನ್​ ಸೇರಿದರು. ಒಂದೇ ಓವರ್​ನಲ್ಲಿ ರೂಟ್​ ಆಸೀಸ್​ಗೆ ಅವಳಿ ಆಘಾತವಿಕ್ಕಿದರು. ಸದ್ಯ ಅಲೆಕ್ಸ್​ ಕೇರಿ(11*) ಮತ್ತು ಸ್ಟೀವನ್​ ಸ್ಮಿತ್​(85*)ರನ್​ ಗಳಿಸಿ ಬ್ಯಾಟಿಂಗ್​ ಕಾಯ್ದುಕೊಂಡಿದ್ದಾರೆ.

ದಾಖಲೆ ಬರೆದ ಸ್ಮಿತ್​

ಅರ್ಧಶತಕ ಬಾರಿಸಿದ ಸ್ಮಿತ್​ ಟೆಸ್ಟ್​ ಕ್ರಿಕೆಟ್​ನಲ್ಲಿ ಅತಿ ವೇಗವಾಗಿ 9 ಸಾವಿರ ರನ್​ ಗಡಿ ದಾಟಿದ ಸಾಧನೆ ಮಾಡಿದರು. ಈ ಸಾಧನೆ ಮಾಡಿದ ದ್ವಿತೀಯ ಆಟಗಾರ ಎಂಬ ಕೀರ್ತಿಗೆ ಅವರು ಭಾಜನರಾಗಿದ್ದಾರೆ. ಜತೆಗೆ ಅತಿ ಕಡಿಮೆ ಪಂದ್ಯಗಳನ್ನು ಆಡಿ ಈ ದಾಖಲೆ ಬರೆದ ಮೊದಲ ಆಟಗಾರ ಎಂಬ ದಾಖಲೆಯನ್ನೂ ಬರೆದರು. ಇದುವರೆಗೆ ಈ ದಾಖಲೆ ಬ್ರಿಯಾನ್​ ಲಾರಾ ಅವರ ಹೆಸರಿನಲ್ಲಿತ್ತು. ಅವರು 101 ಟೆಸ್ಟ್​ ಪಂದ್ಯ ಆಡಿ 9 ಸಾವಿರ ರನ್​ ಪೂರ್ತಿಗೊಳಿಸಿದ್ದರು. ಆದರೆ ಸ್ಮಿತ್​ ಕೇವಲ 99 ಪಂದ್ಯ ಆಡಿ ಈ ದಾಖಲೆಯನ್ನು ಮುರಿದಿದ್ದಾರೆ.

ಅತಿ ಕಡಿಮೆ ಇನಿಂಗ್ಸ್​ನಲ್ಲಿ 9 ಸಾವಿರ ರನ್​ ಪೂರ್ತಿಗೊಳಿಸಿದ ಸಾಧಕರ ಪಟ್ಟಿಯಲ್ಲಿ ಶ್ರೀಲಂಕಾದ ಮಾಜಿ ಆಟಗಾರ ಕುಮಾರ ಸಂಗಕ್ಕರ(Kumar Sangakkara) ಅವರಿಗೆ ಅಗ್ರಸ್ಥಾನ. ಅವರು 172 ಇನಿಂಗ್ಸ್​ನಲ್ಲಿ ಈ ಸಾಧನೆ ಮಾಡಿದ್ದಾರೆ. ಸ್ಮಿತ್​ 174 ಇನಿಂಗ್ಸ್​ನಲ್ಲಿ 9 ಸಾವಿರ ರನ್​ ಬಾರಿಸಿದ್ದಾರೆ. ರಾಹುಲ್​ ಡ್ರಾವಿಡ್​(Rahul Dravid) ಅವರು 176 ಇನಿಂಗ್ಸ್​ನಲ್ಲಿ ಈ ಮೊತ್ತ ಕಲೆಹಾಕಿ ಮೂರನೇ ಸ್ಥಾನ ಪಡೆದಿದ್ದಾರೆ. ಲಾರಾ ಮತ್ತು ರಿಕಿ ಪಾಂಟಿಂಗ್(Ricky Ponting)​ ಕ್ರಮವಾಗಿ ನಾಲ್ಕು ಮತ್ತು 5ನೇ ಸ್ಥಾನದಲ್ಲಿದ್ದಾರೆ.

ಕ್ಷಣ ಕ್ಷಣದ ಮಾಹಿತಿಗಾಗಿ Vistara News FaceBook ಪೇಜ್ ಫಾಲೋ ಮಾಡಿ
ಮಹತ್ವದ ಮಾಹಿತಿಗಾಗಿ ವಿಸ್ತಾರ ನ್ಯೂಸ್ ಆ್ಯಪ್ ಉಚಿತವಾಗಿ ಡೌನ್ ಲೋಡ್ ಮಾಡಿಕೊಳ್ಳಿ: Andriod App | IOS App
Continue Reading
Click to comment

Leave a Reply

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ

ಬೆಂಗಳೂರು

KVS Sports Meet : 53ನೇ ಕೆವಿಎಸ್ ರಾಷ್ಟ್ರೀಯ ಕ್ರೀಡಾಕೂಟಕ್ಕೆ ಚಾಲನೆ; ಮೈದಾನದಲ್ಲಿ ಬಾಲಕರ ರೋಚಕ ಕ್ರಿಕೆಟ್

KVS Sports Meet : 53ನೇ ಕೆವಿಎಸ್ ರಾಷ್ಟ್ರೀಯ ಕ್ರೀಡಾಕೂಟಕ್ಕೆ ಚಾಲನೆ ನೀಡಲಾಗಿದ್ದು, ಮೊದಲ ದಿನವೇ ಮೈದಾನದಲ್ಲಿ ಬಾಲಕರ ಕ್ರಿಕೆಟ್ ರೋಚಕವಾಗಿತ್ತು.

VISTARANEWS.COM


on

By

53rd KVS National Games inaugurated
Koo

ಬೆಂಗಳೂರು: 53ನೇ ಕೆವಿಎಸ್ ರಾಷ್ಟ್ರೀಯ ಕ್ರೀಡಾಕೂಟ 2024-25ಕ್ಕೆ (KVS Sports Meet) ಸೋಮವಾರ ಬೆಂಗಳೂರಿನ ಯಲಹಂಕದ ಕೇಂದ್ರೀಯ ವಿದ್ಯಾಲಯ ಆರ್‌ಡಬ್ಲ್ಯೂ ಎಫ್‌ನಲ್ಲಿ ಚಾಲನೆ ನೀಡಲಾಯಿತು. 14 ವರ್ಷದೊಳಗಿನ ಬಾಲಕರ ವಿಭಾಗದ ಕ್ರಿಕೆಟ್‌ ರೋಚಕವಾಗಿತ್ತು. ಮುಖ್ಯ ಅತಿಥಿಯಾಗಿ ಕೆವಿಎಸ್‌ ಉಪ ಆಯುಕ್ತರು ಡಾ.ಧರ್ಮೇಂದ್ರ ಪಟ್ಲೆ, ಸಹಾಯಕ ಆಯುಕ್ತ ಆರ್ ಪ್ರಮೋದ್ ಸೇರಿ ಇತರರು ಭಾಗಿಯಾಗಿದ್ದರು.

53rd KVS National Games inaugurated
53rd KVS National Games inaugurated

ಇದೇ ವೇಳೆ ಕೆ.ವಿ.ಎಸ್ ಧ್ವಜಾರೋಹಣವನ್ನು ಮುಖ್ಯ ಅತಿಥಿಗಳು ನೆರವೇರಿಸಿದರು. ಪಾತ್ರ ಮತ್ತು ನಾಯಕತ್ವ ಎರಡನ್ನೂ ಅಭಿವೃದ್ಧಿಪಡಿಸುವಲ್ಲಿ ಕ್ರೀಡೆಯ ಮಹತ್ವವನ್ನು ಎತ್ತಿ ತೋರಿಸಿದರು. ಆಟಗಾರರನ್ನು ಹುಮ್ಮಸ್ಸಿನಿಂದ ಸ್ಪರ್ಧಿಸಲು ಪ್ರೋತ್ಸಾಹಿಸಿದರು. ಮುಂಬರುವ ದಿನಗಳಲ್ಲಿ ರೋಚಕ ಕ್ರಿಕೆಟ್ ಪಂದ್ಯಗಳನ್ನು ನೋಡುವ ನಿರೀಕ್ಷೆಯಿದೆ, ಏಕೆಂದರೆ ಭಾಗವಹಿಸುವವರು ತಮ್ಮ ಅತ್ಯುತ್ತಮ ಪ್ರದರ್ಶನವನ್ನು ಮೈದಾನಕ್ಕೆ ತರುತ್ತಾರೆ ಎಂದು ಅಭಿಪ್ರಾಯಪಟ್ಟರು.

Continue Reading

ಕ್ರೀಡೆ

Duleep Trophy: ದುಲೀಪ್​ ಟ್ರೋಫಿಯಿಂದ ಹೊರಬಿದ್ದ ಮೊಹಮ್ಮದ್ ಸಿರಾಜ್

Duleep Trophy: ವೃತ್ತಿಪರ ಕ್ರಿಕೆಟ್​ಗೆ ಮರಳುವ ನಿರೀಕ್ಷೆಯಲ್ಲಿ ಜಮ್ಮ ಕಾಶ್ಮೀರದ ವೇಗಿ ಉಮ್ರಾನ್ ಮಲಿಕ್(Umran Malik) ಕೂಡ ಅನಾರೋಗ್ಯದ ಕಾರಣ ಪಂದ್ಯಾವಳಿಯಿಂದ ಹೊರಗುಳಿದಿದ್ದಾರೆ.

VISTARANEWS.COM


on

Duleep Trophy
Koo

ಮುಂಬಯಿ: ದುಲೀಪ್​ ಟ್ರೋಫಿ(Duleep Trophy) ಆರಂಭಕ್ಕೂ ಮುನ್ನವೇ ಟೀಮ್​ ಇಂಡಿಯಾದ ವೇಗಿ ಮೊಹಮ್ಮದ್ ಸಿರಾಜ್(mohammed siraj) ಅನಾರೋಗ್ಯದ ಕಾರಣ ಟೂರ್ನಿಯಿಂದ ಹೊರಬಿದ್ದಿದ್ದಾರೆ. ಅವರ ಬದಲಿಗೆ ನವದೀಪ್ ಸೈನಿ ಸ್ಥಾನ ಪಡೆದಿದ್ದಾರೆ. ಇದೇ ವೇಳೆ ಹಿರಿಯ ಆಟಗಾರ ರವೀಂದ್ರ ಜಡೇಜಾ(Ravindra Jadeja) ಅವರನ್ನು ಭಾರತ ‘ಬಿ’ ತಂಡದಿಂದ ಬಿಡುಗಡೆ ಮಾಡಲಾಗಿದೆ.

ವೃತ್ತಿಪರ ಕ್ರಿಕೆಟ್​ಗೆ ಮರಳುವ ನಿರೀಕ್ಷೆಯಲ್ಲಿ ಜಮ್ಮ ಕಾಶ್ಮೀರದ ವೇಗಿ ಉಮ್ರಾನ್ ಮಲಿಕ್(Umran Malik) ಕೂಡ ಅನಾರೋಗ್ಯದ ಕಾರಣ ಪಂದ್ಯಾವಳಿಯಿಂದ ಹೊರಗುಳಿದಿದ್ದಾರೆ. ಉಮ್ರಾನ್ ಬದಲಿಗೆ ಮಧ್ಯಪ್ರದೇಶದ ಮಧ್ಯಮ ವೇಗಿ ಗೌರವ್ ಯಾದವ್ ಭಾರತ ‘ಸಿ’ ತಂಡದಲ್ಲಿ ಸ್ಥಾನ ಪಡೆದಿದ್ದಾರೆ. ಜಡೇಜಾ ಸ್ಥಾನಕ್ಕೆ ಬದಲಿ ಆಟಗಾರನನ್ನ ಹೆಸರಿಸಲಾಗಿಲ್ಲ. ಜಡೇಜಾ ದುಲೀಪ್ ಟ್ರೋಫಿಯಲ್ಲಿ ಕೇವಲ ಒಂದು ಪಂದ್ಯವನ್ನು ಆಡಿ ಬಳಿಕ ಬಾಂಗ್ಲಾದೇಶ ಟೆಸ್ಟ್​ ಸರಣಿಗೆ ಮುಂಚಿತವಾಗಿ ಭಾರತ ಶಿಬಿರಕ್ಕೆ ತೆರಳಬೇಕಿತ್ತು. ಆದರೆ ಬಿಸಿಸಿಐ ಅವರಿಗೆ ಕೊನೆಯ ಕ್ಷಣದಲ್ಲಿ ವಿಶ್ರಾಂತಿ ನೀಡಿದೆ. ಭಾರತ ‘ಎ’ ತಂಡವನ್ನು ಶುಭಮನ್ ಗಿಲ್ ಮುನ್ನಡೆಸಿದರೆ, ‘ಡಿ’ತಂಡವನ್ನು ಶ್ರೇಯಸ್‌ ಅಯ್ಯರ್‌ ಮುನ್ನಡೆಸಲಿದ್ದಾರೆ.

ಭಾರತ ‘ಎ’ ತಂಡ


ಶುಭಮನ್ ಗಿಲ್ (ನಾಯಕ), ಮಯಾಂಕ್ ಅಗರ್ವಾಲ್, ರಿಯಾನ್ ಪರಾಗ್, ಧ್ರುವ ಜುರೆಲ್ (ವಿಕೆಟ್‌ ಕೀಪರ್), ಕೆಎಲ್ ರಾಹುಲ್, ತಿಲಕ್ ವರ್ಮಾ, ಶಿವಂ ದುಬೆ, ತನುಷ್ ಕೋಟ್ಯಾನ್, ಕುಲದೀಪ್ ಯಾದವ್, ಆಕಾಶ್ ದೀಪ್, ಪ್ರಸಿದ್ಧ್ ಕೃಷ್ಣ, ಖಲೀಲ್ ಅಹ್ಮದ್, ಅವೇಶ್ ಖಾನ್, ವಿದ್ವತ್ ಕಾವೇರಪ್ಪ, ಕುಮಾರ್ ಕುಶಾಗ್ರ , ಶಾಶ್ವತ್ ರಾವತ್.

ಭಾರತ ‘ಬಿ’ ತಂಡ


ಅಭಿಮನ್ಯು ಈಶ್ವರನ್ (ನಾಯಕ), ಯಶಸ್ವಿ ಜೈಸ್ವಾಲ್, ಸರ್ಫರಾಜ್ ಖಾನ್, ರಿಷಭ್ ಪಂತ್ (ವಿ.ಕೀ), ಮುಷೀರ್ ಖಾನ್, ನಿತೀಶ್ ಕುಮಾರ್ ರೆಡ್ಡಿ (ಫಿಟ್‌ನೆಸ್‌ ಟೆಸ್ಟ್‌ ಅವಲಂಬನೆ), ವಾಷಿಂಗ್ಟನ್ ಸುಂದರ್, ನವದೀಪ್ ಸೈನಿ, ಯಶ್ ದಯಾಳ್, ಮುಖೇಶ್ ಕುಮಾರ್, ರಾಹುಲ್ ಚಹರ್, ಆರ್ ಸಾಯಿ ಕಿಶೋರ್, ಮೋಹಿತ್ ಆವಸ್ತಿ, ಎನ್ ಜಗದೀಸನ್ (ವಿ.ಕೀ)

ಇದನ್ನೂ ಓದಿ Natasa Stankovic: ಪಾಂಡ್ಯ ಜತೆಗಿನ ವಿಚ್ಛೇದನದ ಅಸಲಿ ಸತ್ಯ ಬಿಚ್ಚಿಟ್ಟ ನತಾಶ!

ಭಾರತ ‘ಸಿ’ ತಂಡ


ಋತುರಾಜ್ ಗಾಯಕ್ವಾಡ್​ (ನಾಯಕ), ಸಾಯಿ ಸುದರ್ಶನ್, ರಜತ್ ಪಾಟಿದಾರ್, ಅಭಿಷೇಕ್ ಪೊರೆಲ್ (ವಿ.ಕೀ), ಸೂರ್ಯಕುಮಾರ್ ಯಾದವ್, ಬಿ ಇಂದ್ರಜಿತ್, ಹೃತಿಕ್ ಶೋಕೀನ್, ಮಾನವ್ ಸುತಾರ್, ಗೌರವ್ ಯಾದವ್, ವೈಶಾಕ್ ವಿಜಯ್‌ಕುಮಾರ್, ಅನ್ಶುಲ್ ಖಂಬೋಜ್, ಹಿಮಾಂಶು ಚೌಹಾಣ್, ಮಯಾಂಕ್ ಮಾರ್ಕಂಡೆ, ಆರ್ಯನ್‌ ಜುಯೆಲ್‌ (ವಿ.ಕೀ), ಸಂದೀಪ್ ವಾರಿಯರ್.

ಭಾರತ ‘ಡಿ’ ತಂಡ

ಶ್ರೇಯಸ್ ಅಯ್ಯರ್​ (ನಾಯಕ), ಅಥರ್ವ ಟೈಡೆ, ಯಶ್ ದುಬೆ, ದೇವದತ್ ಪಡಿಕ್ಕಲ್, ಇಶಾನ್ ಕಿಶನ್ (ವಿಕೆಟ್‌ ಕೀಪರ್), ರಿಕಿ ಭುಯಿ, ಸರನ್ಶ್ ಜೈನ್, ಅಕ್ಷರ್ ಪಟೇಲ್, ಅರ್ಷದೀಪ್ ಸಿಂಗ್, ಆದಿತ್ಯ ಠಾಕರೆ, ಹರ್ಷಿತ್ ರಾಣಾ, ತುಷಾರ್ ದೇಶಪಾಂಡೆ, ಆಕಾಶ್ ಸೇನ್‌ಗುಪ್ತ, ಕೆಎಸ್ (ವಿಕೆಟ್‌ ಕೀಪರ್), ಸೌರಭ್ ಕುಮಾರ್.

Continue Reading

ಕ್ರೀಡೆ

IPL 2025: ಮುಂಬೈ ಇಂಡಿಯನ್ಸ್​ಗೆ ನೂತನ ನಾಯಕ; ಪೋಸ್ಟರ್​ ಬಿಡುಗಡೆ ಮಾಡಿದ ಫ್ರಾಂಚೈಸಿ

IPL 2025: ಬುಮ್ರಾ ರೋಹಿತ್​ಗೆ ಬಹಳ ಆತ್ಮಿಯರಾಗಿರುವ ಕಾರಣ ಬುಮ್ರಾ ನಾಯಕನಾದರೆ ರೋಹಿತ್​ ಕೂಡ ಮುಂಬೈ ತೊರೆಯಲು ಹಿಂದೇಟು ಹಾಕಬಹುದು ಎನ್ನುವುದು ಫ್ರಾಂಚೈಸಿಯ ಯೋಜನೆ.

VISTARANEWS.COM


on

Jasprit Bumrah
Koo

ಮುಂಬಯಿ: 5 ಬಾರಿಯ ಚಾಂಪಿಯನ್​ ಮುಂಬೈ ಇಂಡಿಯನ್ಸ್​(Mumbai Indians) ಮುಂಬರುವ ಐಪಿಎಲ್​ ಆವೃತ್ತಿಗೂ ಮುನ್ನ ಮಹತ್ವದ ಘೋಷಣೆಯೊಂದನ್ನು ಮಾಡಲು ಮುಂದಾಗಿದೆ. ಇದರ ಸುಳಿವನ್ನು ಸ್ವತಃ ಫ್ರಾಂಚೈಸಿಯೇ ತನ್ನ ಅಧಿಕೃತ ಸಾಮಾಜಿಕ ಜಾಲತಾಣದಲ್ಲಿ ಬಿಟ್ಟುಕೊಟ್ಟಿದೆ. ಹೌದು, ಪ್ರಧಾನ ವೇಗಿ ಜಸ್​ಪ್ರೀತ್​ ಬುಮ್ರಾ(Jasprit Bumrah) ಅವರನ್ನು ನೂತನ ನಾಯಕನನ್ನಾಗಿ ಮಾಡಲು ನಿರ್ಧರಿಸಿದಂತಿದೆ. ಬುಮ್ರಾ ಅವರು ಜನಗಳ ಮಧ್ಯೆ ಕೈಬೀಸುತ್ತಾ ರ‍್ಯಾಂಪ್ ವಾಕ್ ಮಾಡುತ್ತಿರುವ ಫೋಟೊವನ್ನು ಹಂಚಿಕೊಂಡಿದೆ. ಹೀಗಾಗಿ ಬುಮ್ರಾ ನಾಯಕನಾಗುವುದು ಖಚಿತ ಎನ್ನುವಂತಿದೆ. ಇದಕ್ಕೆ ಅಧಿಕೃತ ಮುದ್ರೆಯೊಂದು ಬೀಳಲು ಮಾತ್ರ ಬಾಕಿ ಇದೆ.

ಕಳೆದ ಬಾರಿ ರೋಹಿತ್​ ಶರ್ಮ ಅವರನ್ನು ನಾಯಕತ್ವದಿಂದ ಕೆಳಗಿಳಿಸಿ ಹಾರ್ದಿಕ್​ ಪಾಂಡ್ಯ(Hardik Pandya)ಗೆ ನಾಯಕತ್ ಪಟ್ಟ ನೀಡಲಾಗಿತ್ತು. ಆದರೆ, ಪಾಂಡ್ಯ ನಾಯಕತ್ವದಲ್ಲಿ ಮುಂಬೈ ತಂಡ ಎಂದೂ ಕಾಣದ ವೈಫಲ್ಯ ಕಂಡಿತ್ತು. ಪಾಂಡ್ಯ ನಾಯಕನಾಗುವ ಬಗ್ಗೆ ಬುಮ್ರಾ ಅಸಮಾಧಾನವನ್ನು ವ್ಯಕ್ತಪಡಿಸಿದ್ದರು. ಬಳಿಕ ಫ್ರಾಂಚೈಸಿಯೇ ಅವರನ್ನು ಸಮಾಧಾನಪಡಿಸಿತ್ತು. ಇದೀಗ ಬುಮ್ರಾ ಅವರನ್ನೇ ನಾಯಕನನ್ನಾಗಿ ಮಾಡಲು ಮುಂದಾಗಿದೆ. ಬುಮ್ರಾ ಕಾರ್ಯವೈಖರಿ ಬಗ್ಗೆಯೂ ಸಹ ಆಟಗಾರರಿಗೆ ಸಮಧಾನವಿದೆ. ಬುಮ್ರಾ ರೋಹಿತ್​ಗೆ ಬಹಳ ಆತ್ಮಿಯರಾಗಿರುವ ಕಾರಣ ಬುಮ್ರಾ ನಾಯಕನಾದರೆ ರೋಹಿತ್​ ಕೂಡ ಮುಂಬೈ ತೊರೆಯಲು ಹಿಂದೇಟು ಹಾಕಬಹುದು ಎನ್ನುವುದು ಫ್ರಾಂಚೈಸಿಯ ಯೋಜನೆ.

ಜಸ್​ಪ್ರೀತ್​ ಬುಮ್ರಾ ಅವರು ಇದುವರೆಗೆ 133 ಐಪಿಎಲ್​ ಆಡಿದ್ದು 165 ವಿಕೆಟ್​ ಕೆಡವಿದ್ದಾರೆ. 2013ರಲ್ಲಿ ಮುಂಬೈ ತಂಡದ ಪರ ಐಪಿಎಲ್​ ಪದಾರ್ಪಣೆ ಮಾಡಿದ್ದ ಬುಮ್ರಾ ಇದುವರೆಗೂ ಮುಂಬೈ ಪರವೇ ಆಡುತ್ತಿದ್ದಾರೆ.

ಇದನ್ನೂ ಓದಿ IPL 2025: ಮುಂಬೈ ಇಂಡಿಯನ್ಸ್​ಗೆ ಶ್ರೇಯಸ್​ ಅಯ್ಯರ್​, ಕೆಕೆಆರ್​ಗೆ ಸೂರ್ಯಕುಮಾರ್​ ನಾಯಕ!​

ಸೂರ್ಯಕುಮಾರ್​ ಯಾದವ್​ಗೆ ಹಾಲಿ ಚಾಂಪಿಯನ್​ ಕೆಕೆಆರ್(KKR)​ ತಂಡದಿಂದ ನಾಯಕತ್ವದ ಆಫರ್​ ಬಂದಿದೆ ಎಂದು ವರದಿಯಾಗಿದೆ. ಸೂರ್ಯಕುಮಾರ್​ ಯಾದವ್​ ಅವರು ಮುಂಬೈ ತಂಡ ಸೇರುವ ಮುನ್ನ ಕೆಕೆಆರ್​ ಪರ ಆಡುತ್ತಿದ್ದರು. 2014 ರ ಐಪಿಎಲ್ ಹರಾಜಿನಲ್ಲಿ ಅವರನ್ನು ಕೋಲ್ಕತ್ತಾ ನೈಟ್ ರೈಡರ್ಸ್ (ಕೆಕೆಆರ್) ಖರೀದಿಸಿತ್ತು. ಇದೇ ಆವೃತ್ತಿಯಲ್ಲಿ ಕೆಕೆಆರ್​ ಚಾಂಪಿಯನ್​ ಕೂಡ ಆಗಿತ್ತು. ಗೌತಮ್​ ಗಂಭೀರ್​ ತಂಡದ ನಾಯಕನಾಗಿದ್ದರು. ಸೂರ್ಯಕುಮಾರ್​ ಕೆಕೆಆರ್​ ಪರ ನಾಲ್ಕು ಋತುಗಳಲ್ಲಿ 54 ಪಂದ್ಯಗಳನ್ನಾಡಿ 608 ರನ್​ ಬಾರಿಸಿದ್ದರು. 2018ರಲ್ಲಿ ಸೂರ್ಯ ಮುಂಬೈ ತಂಡ ಸೇರಿದ್ದರು.

ಸೂರ್ಯಕುಮಾರ್​ ಇದುವರೆಗೆ 150 ಐಪಿಎಲ್ ಪಂದ್ಯಗಳಿಂದ 3594 ರನ್​ ಬಾರಿಸಿದ್ದಾರೆ. ಇದರಲ್ಲಿ 2 ಶತಕ ಮತ್ತು 24 ಅರ್ಧಶತಕ ಒಳಗೊಂಡಿದೆ. ರೋಹಿತ್ ಶರ್ಮ ಅವರು ಟಿ20 ಕ್ರಿಕೆಟ್​ಗೆ ನಿವೃತ್ತಿ ಹೇಳಿದ ಕಾರಣ ಭಾರತ ತಂಡದ ಟಿ20 ನಾಯಕತ್ವ ಸೂರ್ಯಕುಮಾರ್​ ಹೆಗಲೇರಿದೆ. ಅವರ ಪೂರ್ಣ ಪ್ರಮಾಣದ ನಾಯಕತ್ವದಲ್ಲಿ ಆಡಿದ್ದ ಕಳೆದ ಲಂಕಾ ವಿರುದ್ಧದ ಟಿ20 ಸರಣಿಯಲ್ಲಿ ಭಾರತ 3-0 ಅಂತರದಿಂದ ಗೆದ್ದು ಬೀಗಿತ್ತು.

Continue Reading

ಕ್ರೀಡೆ

Natasa Stankovic: ಪಾಂಡ್ಯ ಜತೆಗಿನ ವಿಚ್ಛೇದನದ ಅಸಲಿ ಸತ್ಯ ಬಿಚ್ಚಿಟ್ಟ ನತಾಶ!

Natasa Stankovic: ನತಾಶಾ ಅವರ ಈ ಪೋಸ್ಟ್ ನೋಡುವಾಗ ಪಾಂಡ್ಯ ಅವರು ನತಾಶ ಜತೆಗೆ ಸರಿಯಾಗಿ ಸಂವಹನ ಮತ್ತು ಅವರನ್ನು ಕೇರ್​ ಮಾಡುತ್ತಿರಲಿಲ್ಲ ಎನ್ನುವಂತಿದೆ.

VISTARANEWS.COM


on

Natasa Stankovic
Koo

ಲಂಡನ್​: ಜುಲೈನಲ್ಲಿ ಕ್ರಿಕೆಟಿಗ ಹಾರ್ದಿಕ್​ ಪಾಂಡ್ಯ(Hardik Pandya) ಅವರು ತಮ್ಮ ಪತ್ನಿ ನತಾಶಾ ಸ್ಟಾಂಕೋವಿಕ್(Natasa Stankovic) ಅವರಿಗೆ ವಿಚ್ಛೇದನ(Hardik-Natasa Divorce) ನೀಡುವ ಮೂಲಕ 4 ವರ್ಷಗಳ ದಾಂಪತ್ಯ ಜೀವನಕ್ಕೆ ಬ್ರೇಕ್ ಹಾಕಿದ್ದರು. ಆದರೆ, ಈ ಜೋಡಿಯ ವಿಚ್ಛೇದನಕ್ಕೆ ಏನು ಕಾರಣವಿರಬಹುದೆಂದು ಎಂಬ ಬಗ್ಗೆ ನಿರಂತರ ಊಹಾಪೋಹಗಳ ಸುದ್ದಿಗಳು ಸಾಮಾಜಿಕ ಜಾಲತಾಣದಲ್ಲಿ ಹರಿದಾಡುತ್ತಲೇ ಇದೆ. ಇದೀಗ ನತಾಶ ಅವರೇ ತಮ್ಮ ವಿಚ್ಛೇದನಕ್ಕೆ ಕಾರಣ ಏನೆಂಬುದನ್ನು ಪರೋಕ್ಷವಾಗಿ ತಿಳಿಸಿದ್ದಾರೆ.

ಇನ್​ಸ್ಟಾಗ್ರಾಮ್​ ಖಾತೆಯಲ್ಲಿ ಪೋಸ್ಟ್​ ಒಂದನ್ನು ಮಾಡಿರುವ ನತಾಶ, “ಪ್ರೀತಿಯು ಇತರರನ್ನು ಎಂದಿಗೂ ಅವಮಾನಿಸುವುದಿಲ್ಲ.. ಪ್ರೀತಿ ಎಂದರೇ ದಯೆ ಮತ್ತು ತಾಳ್ಮೆ, ಇದು ಹೆಮ್ಮೆ ಅಥವಾ ಅಸೂಯೆಯಲ್ಲ. ಪ್ರೀತಿ ಎನ್ನುವುದು ಬೇಡಿಕೆಯ ವಸ್ತು ಆಗಬಾರದು. ಪ್ರೀತಿ ಎನ್ನುವುದು ರಕ್ಷಣೆ ನೀಡಬೇಕು. ನಿಜವಾದ ಪ್ರೀತಿ ಎಂದಿಗೂ ಸುಳ್ಳಾಗುವುದಿಲ್ಲ” ಎಂದು ಬರೆದುಕೊಂಡಿದ್ದಾರೆ.

ಇದನ್ನೂ ಓದಿ Natasa Stankovic : ‘ಹೊಸ ಹೆಸರನ್ನು ಪಡೆಯುತ್ತಿದ್ದೇನೆ’; ಕುತೂಹಲ ಮೂಡಿಸಿದ ನತಾಶಾ ಸ್ಟಾಂಕೊವಿಕ್​ ಹೊಸ ಪೋಸ್ಟ್​​​

ನತಾಶಾ ಅವರ ಈ ಪೋಸ್ಟ್ ನೋಡುವಾಗ ಪಾಂಡ್ಯ ಅವರು ನತಾಶ ಜತೆಗೆ ಸರಿಯಾಗಿ ಸಂವಹನ ಮತ್ತು ಅವರನ್ನು ಕೇರ್​ ಮಾಡುತ್ತಿರಲಿಲ್ಲ ಎನ್ನುವಂತಿದೆ. ಅಲ್ಲದೇ ನತಾಶಾಗೆ ಹಾರ್ದಿಕ್‌ ಅವರ ಕೆಲ ನಡುವಳಿಕೆ ಕೂಡ ಇಷ್ಟವಾಗದೇ ಅದನ್ನು ಸರಿಪಡಿಸಿಕೊಳ್ಳಲು ಹೇಳಿದ್ದರೂ ಪಾಂಡ್ಯ ಇದನ್ನು ಪಾಲಿಸಲು ನಿರಾಕರಿಸಿರಬಹುದು ಇದೇ ಕಾರಣಕ್ಕೆ ಇವರಿಬ್ಬರು ಬೇರೆಯಾದರು ಎನ್ನುವಂತಿದೆ.

ಹಾರ್ದಿಕ್​ ಮತ್ತು ನತಾಶಾ ನಡುವಿನ ಬ್ರೇಕಪ್​ಗೆ ಸಂವಹನ ಕೊರತೆಯೇ ಮುಖ್ಯ ಕಾರಣ ಎಂದು ಆಪ್ತ ಮೂಲಗಳು ಮಾಹಿತಿ ನೀಡಿತ್ತು. ಇಬ್ಬರ ನಡುವಿನ ಮನಸ್ತಾಪ ಮತ್ತು ಜಗಳಕ್ಕೆ ಪರಿಹಾರ ಕಂಡುಕೊಳ್ಳುವ ತಾಳ್ಮೆ ಇಬ್ಬರಲ್ಲೂ ಇರಲಿಲ್ಲ. ಹೀಗಾಗಿ ಮನಸ್ತಾಪ ದೊಡ್ಡದಾಗಿ ಡಿವೋರ್ಸ್​ಗೆ ಕಾರಣವಾಯಿತು ಎಂದು ಆಪ್ತ ಮೂಲಗಳು ತಿಳಿಸಿತ್ತು. ಇದೀಗ ನತಾಶ ಕೂಡ ಪ್ರೀತಿಯ ಬಗ್ಗೆ ಬರೆದುಕೊಂಡಿರುವುದನ್ನು ನೋಡುವಾಗ ಆಪ್ತ ಮೂಲಗಳು ನೀಡಿದ ಮಾಹಿತಿ ಸತ್ಯ ಎನ್ನುವಂತಿದೆ.


ಕಳೆದ ವರ್ಷ ಫೆ.14 ರಂದು ರಾಜಸ್ಥಾನದ ಉದಯ್‌ಪುರದಲ್ಲಿ ಕ್ರಿಷ್ಚಿಯನ್‌ ಸಂಪ್ರದಾಯದಂತೆ ಹಾರ್ದಿಕ್‌ ಮತ್ತು ನತಾಶಾ ಮತ್ತೊಮ್ಮೆ ಅದ್ದೂರಿಯಾಗಿ ಪುನರ್‌ ವಿವಾಹವಾಗಿದ್ದರು. ಕುಟುಂಬಸ್ಥರು ಮತ್ತು ಗೆಳೆಯರ ಸಮ್ಮುಖದಲ್ಲಿ ಮತ್ತೊಮ್ಮೆ ವಿವಾಹವಾಗಿದ್ದರು. ಇದಕ್ಕೂ ಮುನ್ನ ಈ ಜೋಡಿ 2020ರಲ್ಲೇ ರಿಜಿಸ್ಟರ್‌ ರೀತಿಯಲ್ಲಿ ವಿವಾಹವಾಗಿದ್ದರು. ವಿಚ್ಛೇದನ ಪಡೆದರೂ ಕೂಡ ಇಬ್ಬರೂ ಪುತ್ರ ಅಗಸ್ತ್ಯನನ್ನು(Agastya) ಸಹ-ಪೋಷಕರಾಗಿ ನೋಡಿಕೊಳ್ಳುತ್ತೇವೆ. ಅವನಿಗೆ ಯಾವುದೇ ಕಾರಣಕ್ಕೂ ಯಾವ ಕೊರತೆಯೂ ಆಗದಂತೆ ನಾವಿಬ್ಬರೂ ಸಮನಾಗಿ ಅವನ ಜವಾಬ್ದಾರಿ ಹಂಚಿಕೊಳ್ಳಲಿದ್ದೇವೆ ಎಂದು ಈಗಾಗಲೇ ಪಾಂಡ್ಯ ಮತ್ತು ನತಾಶ ಜಂಟಿ ಹೇಳಿಯಲ್ಲಿ ಖಚಿತಪಡಿಸಿದ್ದಾರೆ.

Continue Reading
Advertisement
navaratri
ಬೆಂಗಳೂರು6 ಗಂಟೆಗಳು ago

Navaratri : ನವರಾತ್ರಿ ಸಂಭ್ರಮದಲ್ಲಿ ಗೊಂಬೆಗಳಂತೆ ಮಿಂಚಿದ ಹೆಂಗಳೆಯರು

Mysuru News
ಮೈಸೂರು6 ಗಂಟೆಗಳು ago

Mysuru News : ಪರ್ಯಾವರಣ ಸಂರಕ್ಷಣ ಗತಿವಿಧಿಯಿಂದ ತ್ಯಾಜ್ಯ ಸಂಗ್ರಹಣ ಅಭಿಯಾನಕ್ಕೆ ಚಾಲನೆ

Kodagu News
ಕೊಡಗು7 ಗಂಟೆಗಳು ago

Kodagu News : ದಸರಾದಲ್ಲಿ ಡಿಜೆ ಬಳಕೆಗೆ ನಿರ್ಬಂಧ; ಕೊಡಗು ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಕೆ.ರಾಮರಾಜನ್

Actor Darshan Renukaswamy murder case
ಬೆಂಗಳೂರು7 ಗಂಟೆಗಳು ago

Actor Darshan : ತನಿಖಾಧಿಕಾರಿಗಳ ವಿರುದ್ಧ ಬ್ಯಾಟಿಂಗ್‌ ಮಾಡಿದ ದರ್ಶನ್‌ ಪರ ವಕೀಲ; ಜಾಮೀನು ಅರ್ಜಿ ವಿಚಾರಣೆ ನಾಳೆಗೆ ಮುಂದೂಡಿಕೆ

Bomb threat to BMS, MS Ramayya and four other colleges in Basavanagudi Bengaluru
ಬೆಂಗಳೂರು8 ಗಂಟೆಗಳು ago

Bomb Threat : ಬೆಂಗಳೂರಿನ ಬಸವನಗುಡಿಯ ಬಿಎಂಎಸ್‌ ಸೇರಿ ನಾಲ್ಕು ಕಾಲೇಜುಗಳಿಗೆ ಬಾಂಬ್‌ ಬೆದರಿಕೆ

Medical Seat
ಬೆಂಗಳೂರು9 ಗಂಟೆಗಳು ago

Medical Seat : ಬೆಂಗಳೂರಿನಲ್ಲಿ ಮೆಡಿಕಲ್ ಸೀಟ್ ಕೊಡಿಸುವುದಾಗಿ ಉದ್ಯಮಿಗೆ 1.5 ಕೋಟಿ ರೂ. ವಂಚನೆ

Murder case
ಚಿತ್ರದುರ್ಗ9 ಗಂಟೆಗಳು ago

Murder Case : ಪ್ರಿಯಕರನಿಗಾಗಿ ಪತಿಗೆ ಚಟ್ಟ ಕಟ್ಟಿದ್ದಳು ಪಾಪಿ ಪತ್ನಿ; ಹೊಟ್ಟೆ ಉರಿಯಿಂದ ಸತ್ತ ಎಂದವಳು ಈಗ ಜೈಲುಪಾಲು

Namma metro ticket prices will be hiked soon
ಬೆಂಗಳೂರು11 ಗಂಟೆಗಳು ago

Namma Metro : ಸಿಟಿ ಮಂದಿಗೆ ಮತ್ತೊಂದು ಶಾಕ್‌; ಶೀಘ್ರದಲ್ಲೆ ನಮ್ಮ ಮೆಟ್ರೋ ಟಿಕೆಟ್‌ ದರ ಏರಿಕೆಯ ಬರೆ!

Murder case
ಬೆಂಗಳೂರು11 ಗಂಟೆಗಳು ago

Murder Case : ನಿದ್ದೆಗೆ ಜಾರಿದ 13 ವರ್ಷದ ಬಾಲಕಿಯನ್ನು ಕೊಂದಿದ್ಯಾರು? ನಿಗೂಢ ಸಾವಿನ ಬೆನ್ನಟ್ಟಿದ ಪೊಲೀಸರು

murder case
ಬೆಂಗಳೂರು12 ಗಂಟೆಗಳು ago

Murder case : ಬೆಂಗಳೂರಲ್ಲಿ ಬಿಹಾರಿ ಮೂಲದ ವ್ಯಕ್ತಿಯನ್ನು ದೊಣ್ಣೆಯಿಂದ ಹೊಡೆದು ಭೀಕರ ಹತ್ಯೆ

Kannada Serials
ಕಿರುತೆರೆ12 ತಿಂಗಳುಗಳು ago

Kannada Serials TRP: 2ನೇ ಸ್ಥಾನದಲ್ಲಿ 2 ಧಾರಾವಾಹಿಗಳು; ಟಿಆರ್‌ಪಿ ರೇಸ್‌ನಲ್ಲಿಲ್ಲ ಭಾಗ್ಯಲಕ್ಷ್ಮೀ!

galipata neetu
ಕಿರುತೆರೆ10 ತಿಂಗಳುಗಳು ago

Kanyadana Serial: ಕಿರುತೆರೆಗೆ ಮತ್ತೆ ಎಂಟ್ರಿ ಕೊಟ್ಟ ʻಗಾಳಿಪಟʼ ಖ್ಯಾತಿಯ ʻನೀತುʼ!

Sharmitha Gowda in bikini
ಕಿರುತೆರೆ12 ತಿಂಗಳುಗಳು ago

Geetha Serial Kannada: ನಿದ್ದೆ ಕದ್ದ ಚೋರಿ! ನಟಿ `ಭಾನುಮತಿ’ ಹಾಟ್‌ ಪೋಟೊಗಳಿಗೆ ಫ್ಯಾನ್ಸ್ ಫುಲ್ ಫಿದಾ

Kannada Serials
ಕಿರುತೆರೆ1 ವರ್ಷ ago

Kannada Serials TRP: ನಾಲ್ಕನೇ ಸ್ಥಾನಕ್ಕೆ ಕುಸಿತ ಕಂಡ ʻಸೀತಾ ರಾಮʼ; ಟಿಆರ್‌ಪಿ ರೇಸ್‌ಗೆ ʻಭಾಗ್ಯಲಕ್ಷ್ಮಿʼ ಬ್ಯಾಕ್‌!

Bigg Boss- Saregamapa 20 average TRP
ಕಿರುತೆರೆ12 ತಿಂಗಳುಗಳು ago

Kannada Serials TRP: ಏಳನೇ ಸ್ಥಾನಕ್ಕೆ ʻಅಮೃತಧಾರೆʼ ಕುಸಿತ; ಬಿಗ್‌ ಬಾಸ್‌-ಸರಿಗಮಪ ಟಿಆರ್‌ಪಿ ಎಷ್ಟು?

Kannada Serials
ಕಿರುತೆರೆ12 ತಿಂಗಳುಗಳು ago

Kannada Serials TRP: ಟಿಆರ್‌ಪಿಯಲ್ಲಿ ʻಭಾಗ್ಯಲಕ್ಷ್ಮೀʼ ಹವಾ; ʻಪುಟ್ಟಕ್ಕನ ಮಕ್ಕಳುʼ ಧಾರಾವಾಹಿಗೆ ಸಂಕಷ್ಟ!

Bigg Boss' dominates TRP; Sita Rama fell to the sixth position
ಕಿರುತೆರೆ11 ತಿಂಗಳುಗಳು ago

Kannada Serials TRP: ಟಿಆರ್‌ಪಿಯಲ್ಲಿ ʻಬಿಗ್ ಬಾಸ್ʼದೇ ಮೇಲುಗೈ; 6ನೇ ಸ್ಥಾನಕ್ಕೆ ಕುಸಿದ ʻಸೀತಾ ರಾಮʼ

geetha serial Dhanush gowda engagement
ಕಿರುತೆರೆ10 ತಿಂಗಳುಗಳು ago

Dhanush Gowda: ಗೀತಾ ಧಾರಾವಾಹಿ ನಟನ ನಿಶ್ಚಿತಾರ್ಥ; ಭವ್ಯಾಳ ಕಮೆಂಟ್‌ ಬಾಕ್ಸ್‌ ಆಫ್‌!

Kannada Serials
ಕಿರುತೆರೆ1 ವರ್ಷ ago

Kannada Serials TRP: ಟಿಆರ್‌ಪಿಯಲ್ಲಿ ಏರಿಕೆ ಕಂಡ ʻಅಮೃತಧಾರೆʼ; ʻಗಟ್ಟಿಮೇಳʼಕ್ಕೆ ನಾಲ್ಕನೇ ಸ್ಥಾನ!

varun
ಕಿರುತೆರೆ11 ತಿಂಗಳುಗಳು ago

Brindavana Serial: ʼಬೃಂದಾವನʼ ಧಾರಾವಾಹಿಯಲ್ಲಿ ದೊಡ್ಡ ಟ್ವಿಸ್ಟ್‌; ಪ್ರಮುಖ ಪಾತ್ರಧಾರಿಯೇ ಬದಲು

Action Prince Dhruva Sarja much awaited film Martin to hit the screens on October 11
ಸಿನಿಮಾ1 ದಿನ ago

Martin Movie : ಆ್ಯಕ್ಷನ್‌ ಪ್ರಿನ್ಸ್‌ ಧ್ರುವ ಸರ್ಜಾ ಅಭಿನಯದ ಬಹು ನಿರೀಕ್ಷಿತ ʻಮಾರ್ಟಿನ್ʼ ಚಿತ್ರ ಅಕ್ಟೋಬರ್ 11ರಂದು ತೆರೆಗೆ

Sudeep's birthday location shift
ಸ್ಯಾಂಡಲ್ ವುಡ್1 ತಿಂಗಳು ago

Kichcha Sudeepa: ಸುದೀಪ್‌ ಬರ್ತ್‌ ಡೇ ಲೊಕೇಶನ್‌ ಶಿಫ್ಟ್; ದರ್ಶನ್‌ ಭೇಟಿಗೆ ಬಳ್ಳಾರಿ ಜೈಲಿಗೆ ಹೋಗ್ತಾರಾ ಕಿಚ್ಚ

Actor Darshan
ಸ್ಯಾಂಡಲ್ ವುಡ್1 ತಿಂಗಳು ago

Actor Darshan : ಬಿಗಿ ಭದ್ರತೆಯಲ್ಲಿ ಪರಪ್ಪನ ಅಗ್ರಹಾರದಿಂದ ದರ್ಶನ್‌ ಬಳ್ಳಾರಿಗೆ ಸ್ಥಳಾಂತರ; ಸೆಲ್‌ನಲ್ಲಿ ಏನೆಲ್ಲ ವ್ಯವಸ್ಥೆ ಇದೆ ಗೊತ್ತಾ?

ಮಳೆ1 ತಿಂಗಳು ago

Karnataka rain : ವಿಜಯನಗರದಲ್ಲಿ ಮಳೆ ಅವಾಂತರ; ಹರಿಯುವ ಹಳ್ಳದಲ್ಲೇ ಶವ ಸಾಗಿಸಿದ ಗ್ರಾಮಸ್ಥರು

karnataka Weather Forecast
ಮಳೆ2 ತಿಂಗಳುಗಳು ago

Karnataka Weather : ಭೀಮಾನ ಅಬ್ಬರಕ್ಕೆ ನಲುಗಿದ ನೆರೆ ಸಂತ್ರಸ್ತರು; ನಾಳೆಗೆ ಇಲ್ಲೆಲ್ಲ ಮಳೆ ಅಲರ್ಟ್‌

Bellary news
ಬಳ್ಳಾರಿ2 ತಿಂಗಳುಗಳು ago

Bellary News : ಫಿಲ್ಮಂ ಸ್ಟೈಲ್‌ನಲ್ಲಿ ಕಾಡಿನಲ್ಲಿ ನಿಧಿ ಹುಡುಕಾಟ; ಅತ್ಯಾಧುನಿಕ ಟೆಕ್ನಾಲಜಿ ಬಳಕೆ ಮಾಡಿದ ಖದೀಮರ ಗ್ಯಾಂಗ್‌

Maravoor bridge in danger Vehicular traffic suspended
ದಕ್ಷಿಣ ಕನ್ನಡ2 ತಿಂಗಳುಗಳು ago

Maravoor Bridge : ಕಾಳಿ ನದಿ ಸೇತುವೆ ಬಳಿಕ ಅಪಾಯದಲ್ಲಿದೆ ಮರವೂರು ಸೇತುವೆ; ವಾಹನ ಸಂಚಾರ ಸ್ಥಗಿತ

Wild Animals Attack
ಚಿಕ್ಕಮಗಳೂರು2 ತಿಂಗಳುಗಳು ago

Wild Animals Attack : ಮಲೆನಾಡಲ್ಲಿ ಕಾಡಾನೆಯ ದಂಡು; ತೋಟಕ್ಕೆ ತೆರಳುವ ಕಾರ್ಮಿಕರಿಗೆ ಎಚ್ಚರಿಕೆ

Karnataka Weather Forecast
ಮಳೆ2 ತಿಂಗಳುಗಳು ago

Karnataka Weather : ಮಳೆಯಾಟಕ್ಕೆ ಮುಂದುವರಿದ ಮಕ್ಕಳ ಗೋಳಾಟ; ಆಯ ತಪ್ಪಿದರೂ ಜೀವಕ್ಕೆ ಅಪಾಯ

assault case
ಬೆಳಗಾವಿ2 ತಿಂಗಳುಗಳು ago

Assault Case : ಬೇರೊಬ್ಬ ಯುವತಿ ಜತೆಗೆ ಸಲುಗೆ; ಪ್ರಶ್ನಿಸಿದ್ದಕ್ಕೆ ಪತ್ನಿಗೆ ಮನಸೋ ಇಚ್ಛೆ ಥಳಿಸಿದ ಪಿಎಸ್‌ಐ

ಟ್ರೆಂಡಿಂಗ್‌