Power Point with HPK : ಸಿದ್ದರಾಮಯ್ಯ ಸೆಕ್ಯುಲರ್‌ ಅಲ್ಲ, ಗ್ಯಾರಂಟಿಯಿಂದ ಬದುಕೇ ಸರ್ವನಾಶ: ಸಿ.ಟಿ. ರವಿ - Vistara News

ಕರ್ನಾಟಕ

Power Point with HPK : ಸಿದ್ದರಾಮಯ್ಯ ಸೆಕ್ಯುಲರ್‌ ಅಲ್ಲ, ಗ್ಯಾರಂಟಿಯಿಂದ ಬದುಕೇ ಸರ್ವನಾಶ: ಸಿ.ಟಿ. ರವಿ

Power Point with HPK : ವಿಸ್ತಾರ ನ್ಯೂಸ್‌ ಪ್ರಧಾನ ಸಂಪಾದಕ ಹರಿಪ್ರಕಾಶ್‌ ಕೋಣೆಮನೆ ಅವರು ನಡೆಸಿಕೊಡುವ “ಪವರ್‌ ಪಾಯಿಂಟ್‌ ವಿತ್‌ ಎಚ್‌ಪಿಕೆ” ವಿಶೇಷ ಸಂದರ್ಶನದಲ್ಲಿ ಬಿಜೆಪಿ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಸಿ.ಟಿ. ರವಿ ಅವರು ಮುಕ್ತವಾಗಿ ಮಾತನಾಡಿದ್ದಾರೆ. ಅವರು ರಾಜ್ಯ ಹಾಗೂ ರಾಷ್ಟ್ರ ರಾಜಕಾರಣದ ಹಲವು ಅಂಶಗಳ ಬಗ್ಗೆ ಮುಕ್ತವಾಗಿ ಚರ್ಚಿಸಿದ್ದಾರೆ. ಅಲ್ಲದೆ, ಕಾಂಗ್ರೆಸ್‌ ಗ್ಯಾರಂಟಿಯ ಅಪಾಯದ ವಿಚಾರವಾಗಿ ತಮ್ಮ ಮನದಾಳವನ್ನು ಹೊರಹಾಕಿದ್ದಾರೆ. ಅವರ ಸಂದರ್ಶನದ ಸಾರಾಂಶ ಇಲ್ಲಿದೆ.

VISTARANEWS.COM


on

Power Point With HPK CT Ravi Participate
ಮಹತ್ವದ, ಕುತೂಹಲಕರ ಸುದ್ದಿಗಾಗಿ ಫಾಲೊ ಮಾಡಿ
Koo

ಬೆಂಗಳೂರು: ಉಚಿತ ಯೋಜನೆ ಎಂಬುದು ಎರೆಹುಳು ಇದ್ದಂತೆ. ನಾವು ಮೀನು ಹಿಡಿಯಬೇಕಾದರೆ ಎರೆಹುಳುವನ್ನು ಗಾಳಕ್ಕೆ ಸಿಕ್ಕಿಸುತ್ತಿದ್ದೆವು. ಆ ಎರೆ ಹುಳುವಿನ ಆಸೆಗೆ ಮೀನು ಗಾಳಕ್ಕೆ ಬೀಳುತ್ತಿತ್ತು. ಈಗ ಇಲ್ಲಾಗಿರುವುದೂ ಅದೇ. ಗ್ಯಾರಂಟಿ ಎನ್ನುವಂತಹ ಎರೆಹುಳುವನ್ನು ಗಾಳಕ್ಕೆ ಸಿಕ್ಕಿಸಿ ಮತ ಎನ್ನುವಂತಹ ಮೀನನ್ನು ಕಾಂಗ್ರೆಸ್‌ನವರು ಹಿಡಿದರು. ಆದರೆ, ಇದರಲ್ಲಿ ತನ್ನ ಬದುಕೇ ಹೋಗುತ್ತದೆ ಎಂಬುದು ಆ ಮೀನಿಗೆ ಗೊತ್ತಿಲ್ಲದಂತೆ, ಬದುಕೇ ನಾಶವಾಗುತ್ತದೆ ಎಂಬುದು ಮತದಾರನಿಗೂ ಗೊತ್ತಿಲ್ಲ. ಒಮ್ಮೆ ಅರಿವಿಗೆ ಬಂದಾಗ ಉಳಿದ ಮೀನುಗಳು ಎಚ್ಚರಿಸುತ್ತವೆ ಎಂದು ಉಚಿತ ಗ್ಯಾರಂಟಿ ಯೋಜನೆಗಳ ಬಗ್ಗೆ ಬಿಜೆಪಿ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಸಿ.ಟಿ. ರವಿ ಅವರು ಪವರ್‌ ಪಾಯಿಂಟ್‌ ವಿಥ್‌ ಎಚ್‌ಪಿಕೆ (Power Point with HPK) ಸಂದರ್ಶನದಲ್ಲಿ ಮಾರ್ಮಿಕವಾಗಿ ರಾಜ್ಯ ಸರ್ಕಾರವನ್ನು ತಿವಿದಿದ್ದಾರೆ.

ವಿಸ್ತಾರ ನ್ಯೂಸ್‌ ಪ್ರಧಾನ ಸಂಪಾದಕ ಹರಿಪ್ರಕಾಶ್‌ ಕೋಣೆಮನೆ ಅವರು ನಡೆಸಿಕೊಡುವ “ಪವರ್‌ ಪಾಯಿಂಟ್‌ ವಿತ್‌ ಎಚ್‌ಪಿಕೆ” ವಿಶೇಷ ಸಂದರ್ಶನದಲ್ಲಿ ಮಾತನಾಡಿದ ಸಿ.ಟಿ. ರವಿ ಅವರು, ಕಾಂಗ್ರೆಸ್‌ನ ಗ್ಯಾರಂಟಿ ಯೋಜನೆಗಳು, 2024ರಲ್ಲಿ ನರೇಂದ್ರ ಮೋದಿ ನೇತೃತ್ವದ ಸರ್ಕಾರವೇ ಆಯ್ಕೆ ಆಗುತ್ತದೆ? ಬಿಜೆಪಿಯಲ್ಲಿ ಸರಿ-ತಪ್ಪುಗಳು, ಗೋಹತ್ಯೆ ನಿಷೇಧ ಕಾಯ್ದೆ, ಹಿಜಾಬ್‌ಗೆ ವಿರೋಧ, ಪಠ್ಯ ಪುಸ್ತಕ ಪರಿಷ್ಕರಣೆ, ಬಿಜೆಪಿ ಸೋಲಿನ ಪ್ರಮುಖ 3 ಕಾರಣಗಳು ಸೇರಿದಂತೆ ಹತ್ತಾರು ವಿಷಯಗಳ ಬಗ್ಗೆ ಮುಕ್ತವಾಗಿ ಚರ್ಚೆ ನಡೆಸಿದ್ದಾರೆ.

ಕಾಂಗ್ರೆಸ್‌ಗೆ “ರೋಗ” ಬಂದಿದೆ

ಆಗಿದ್ದನ್ನೆಲ್ಲ ತಾನು ಮಾಡಿದೆ ಎಂದು ಹೇಳಿಕೊಳ್ಳುವುದು, ಆಗದಿರುವುದನ್ನು ಪ್ರಧಾನಿ ನರೇಂದ್ರ ಮೋದಿ ಮಾಡಿರುವುದು ಎಂದು ಹೇಳುವ “ರೋಗ” ಕಾಂಗ್ರೆಸ್‌ನವರಿಗೆ ಇದೆ. ಈಗ 5 ಕೆಜಿ ಅಕ್ಕಿ ಕೊಡುತ್ತಿರುವುದು ಮೋದಿ, ಕೋವಿಡ್‌ ಸಂದರ್ಭದಲ್ಲಿ 10 ಕೆಜಿ ಅಕ್ಕಿ ಕೊಟ್ಟಿದ್ದು ಮೋದಿ, ಜನಧನ ಖಾತೆಗೆ, ಬೀದಿ ಬದಿ ಕಾರ್ಮಿಕರಿಗೆ ಹಣ ಹಾಕಿದ್ದು ಸಹ ಮೋದಿಯವರು. ಆಗ ಇವರು ಯಾವ ಬಿಲದಲ್ಲಿದ್ದರು? ಅವರಿಗೆ ಅಪ ಪ್ರಚಾರ ಮಾಡುವುದೇ ಒಂದು ರೋಗವಾಗಿ ಬಂದು ಬಿಟ್ಟಿದೆ ಎಂದು ಸಿ.ಟಿ. ರವಿ ಹೇಳಿದರು.

ಸಿಟಿ ರವಿ ಉತ್ತರ ಹೀಗಿದೆ…

2014ರಿಂದಲೂ ನರೇಂದ್ರ ಮೋದಿ ಅವರು ಅಕ್ಕಿ ನೀಡುತ್ತಾ ಬಂದಿದ್ದಾರೆ. ಹಾಗಾದರೆ ಕಾಂಗ್ರೆಸ್‌ನವರು ಯಾವತ್ತಾದರೂ ಮೋದಿ ಅವರ ಕೃಪೆಯಿಂದ ಅನ್ನಭಾಗ್ಯ ಅಕ್ಕಿ ಕೊಟ್ಟಿದ್ದೇವೆ ಎಂದು ಹೇಳಿದ್ದಾರಾ? ಈಗಲೂ ಕೇಂದ್ರ ಸರ್ಕಾರ ಕೊಡುತ್ತಿರುವ 5 ಕೆಜಿ ಅಕ್ಕಿ ಬಗ್ಗೆ ಮಾತನಾಡುತ್ತಾರಾ?‌

ಗ್ಯಾರಂಟಿಯ ವಾಗ್ದಾನ ಮಾಡಿದ್ದು ಕಾಂಗ್ರೆಸ್‌ ಪಕ್ಷ. ಅದನ್ನು ಅನುಷ್ಠಾನಗೊಳಿಸುವ ಜವಾಬ್ದಾರಿ ನರೇಂದ್ರ ಮೋದಿ ಅವರದ್ದಲ್ಲ. ಕಾಂಗ್ರೆಸ್‌ ಪಕ್ಷದ್ದಾಗಿದೆ. ತಾವು ಏನು ಬೇಕಾದರೂ ವಾಗ್ದಾನ ಮಾಡುತ್ತೇವೆ. ಅದನ್ನು ಮೋದಿ ಈಡೇರಿಸಬೇಕೆನ್ನುವುದು ಅಪಾಯಕಾರಿ ಬೆಳವಣಿಗೆಯಾಗಿದೆ.

ಕೇಂದ್ರದಲ್ಲಿರುವ ನರೇಂದ್ರ ಮೋದಿಯವರು ಇವರಂತೆ ಯೋಚನೆ ಮಾಡಿದ್ದರೆ ಭಾರತವು ಪ್ರಪಂಚದ 5ನೇ ಅತಿದೊಡ್ಡ ಆರ್ಥಿಕ ಸದೃಢತೆಯುಳ್ಳ ದೇಶವಾಗುತ್ತಿರಲಿಲ್ಲ. ನಾವೂ ಸಹ ಪಾಕಿಸ್ತಾನದ ಭಿಕ್ಷೆ ಬೇಡಬೇಕಿತ್ತು. ಇಲ್ಲವೇ ಶ್ರೀಲಂಕಾದಂತೆ ಅರಾಜಕತೆ ಸೃಷ್ಟಿಯಾಗುತ್ತಿತ್ತು.

ಸಾಲ ಕೊಟ್ಟು ಎಷ್ಟು ದಿನ ತೃಪ್ತಿಪಡಿಸುತ್ತೀರಿ?

ಕಡು ಬಡವನಿಗೆ ನೆರವು ನೀಡುವುದು ತಪ್ಪಲ್ಲ, ಅದು ಧರ್ಮ. ಆದರೆ, ದುಡಿಯುವ ಕೈಗೆ ಕೆಲಸ ಕೊಡಬೇಕು. ಮೂಲ ಸೌಕರ್ಯಕ್ಕೆ ಬಂಡವಾಳ ಹೂಡಿಕೆ ಮಾಡಿದರೆ ಅಷ್ಟು ಆರ್ಥಿಕತೆ ಬೆಳೆಯುತ್ತದೆ. ಸಾಲ ಕೊಟ್ಟು ಎಷ್ಟು ದಿನ ತೃಪ್ತಿ ಪಡಿಸಬಹುದು? ಸಾಲ ಮಾಡಿ ತುಪ್ಪ ತಿನ್ನೋದು, ತಿನ್ನಿಸೋದು ಎಷ್ಟು ದಿನ ನಡೆಯುತ್ತೆ? ಮುಂದೊಂದು ದಿನ ಏನಾಗಬಹುದು? ದೇಶದಲ್ಲಿರುವ ಆರ್ಥಿಕವಾಗಿ ಶಿಸ್ತಿಲ್ಲದ ಬಿಮಾರು ರಾಜ್ಯಗಳ ಸ್ಥಿತಿಗೆ ನಾವೂ ಹೋಗಿಬಿಡಬಹುದು.

ಗ್ಯಾರಂಟಿ ಬಗ್ಗೆ ನಾನು ವ್ಯಕ್ತಿಗತವಾಗಿ ಹೇಳಬೇಕೆಂದರೆ ಅವರನ್ನು ಅವರದ್ದೇ ಧಾಟಿಯಲ್ಲಿ ಎದುರಿಸಬೇಕು. ಆದರೆ, “ಇವರು ಭ್ರಷ್ಟಾಚಾರವನ್ನು ನಡೆಸಲೆಂದೇ ಗ್ಯಾರಂಟಿ ಯೋಜನೆಯನ್ನು ಜಾರಿಗೆ ತಂದಿದ್ದಾರೆ” ಎಂದು ಪ್ರಧಾನಿ ನರೇಂದ್ರ ಮೋದಿ ಅವರು ಜೂನ್‌ 27ರಂದು ಹೇಳಿದ್ದರು. ಈ ಬೆಳವಣಿಗೆಯನ್ನು ನೋಡಿದಾಗ ನನಗೆ ಭಯವಾಗುತ್ತದೆ.

ಪವರ್‌ ಪಾಯಿಂಟ್‌ ವಿತ್‌ ಎಚ್‌ಪಿಕೆಯಲ್ಲಿ ಸಿ.ಟಿ. ರವಿ ಅವರ ಮಾತು; ಇಲ್ಲಿದೆ ವಿಡಿಯೊ

150 ಪ್ಲಸ್‌ ಗೆಲ್ಲುತ್ತೇವೆಂದು ಹೇಳಿದ್ಯಾಕೆ?

ಚುನಾವಣೆಗೆ ಪೂರ್ವದಲ್ಲಿ ನಾವು ಮಾಡಿಸಿದ ಸರ್ವೇ ಪ್ರಕಾರ, ಕಾಂಗ್ರೆಸ್‌ ಹಾಗೂ ಬಿಜೆಪಿಯು 90 ಪ್ಲಸ್‌ ಸ್ಥಾನವನ್ನು ಗೆಲ್ಲಲಿದೆ ಎಂಬುದು ತಿಳಿದುಬಂದಿತ್ತು. ಆದರೆ, ಹೊರಗಡೆ ಕಾರ್ಯಕರ್ತರ ಉತ್ಸಾಹಕ್ಕೆ ನಾವು 130, 150 ಪ್ಲಸ್‌ ಎಂದು ಹೇಳುತ್ತಿದ್ದೆವು. ಆದರೆ, ಕೊನೆಯಲ್ಲಿ ನಾವು ಸೋತಿದ್ದೇವೆ. ಇದನ್ನು ಒಪ್ಪಿಕೊಂಡಿದ್ದೇವೆ.

ಒಳ ಮೀಸಲಾತಿ ಪಡೆದ ಸಮಯದಾಯ ಬೆಂಬಲಕ್ಕೆ ನಿಲ್ಲಲಿಲ್ಲ

ಒಳ ಮೀಸಲಾತಿಯನ್ನು ನಾವು ಸದುದ್ದೇಶದಿಂದ ಜಾರಿಗೆ ತಂದೆವು. ಈ ಹಿಂದೆ ಸದಾಶಿವ ಆಯೋಗವು ಲಂಬಾಣಿ ಮತ್ತು ಬೋವಿ ಸಮಾಜಗಳಿಗೆ ಶೇ. 3ರಷ್ಟು ಒಳ ಮೀಸಲಾತಿ ನೀಡಿತ್ತು. ನಾವದನ್ನು ಶೇ. 4.5ಕ್ಕೆ ಹೆಚ್ಚಿಸಿದೆವು. ಆದರೆ, ಜನರನ್ನು ವಿಶ್ವಾಸಕ್ಕೆ ತೆಗೆದುಕೊಳ್ಳುವುದರಲ್ಲಿ ನಾವು ವಿಫಲವಾದೆವು. ಎಡಗೈ, ಬಲಗೈ ಸಮಾಜವು ನಮ್ಮ ಪರ ನಿಲ್ಲಲಿಲ್ಲ.

ಕಾಂಗ್ರೆಸ್‌ನಿಂದ ಮತದಾನದ ಮಾಫಿಯಾ

ಗೋವಿನ ಜತೆಗೆ ಭಾರತೀಯ ಸಂಸ್ಕೃತಿ ಅಡಗಿದೆ. ಬಿಜೆಪಿ ಪಕ್ಷ ಅಸ್ತಿತ್ವಕ್ಕೆ ಬರುವ ಮೊದಲೇ ಗೋಹತ್ಯೆ ನಿಷೇಧ ಇತ್ತು. ಈಗ ನಾವು ಅದನ್ನು ಬಲಪಡಿಸುವ ಕೆಲಸವನ್ನು ಮಾಡಿದ್ದೆವು. ಈಗ ಈ ಸರ್ಕಾರ ಅಕ್ರಮ ಗೋಹತ್ಯೆ ಮಾಡುವವರನ್ನು ಬೆಂಬಲಿಸುತ್ತಿದೆ. ಈ ಮೂಲಕ ಮತದಾನದ ಮಾಫಿಯಾವನ್ನು ಸೃಷ್ಟಿ ಮಾಡುತ್ತಿದೆ.

ಸಮವಸ್ತ್ರ್ರ V/s ಹಿಜಾಬ್‌ ಆಗಲಿಲ್ಲ

ಶಾಲೆಯಲ್ಲಿ ಸಮವಸ್ತ್ರ ಇರಬೇಕೆನ್ನುವುದು 1964ರಿಂದಲೇ ಬಂದಿರುವ ಕಾಯಿದೆಯಾಗಿದೆ. ಬಡವ- ಬಲ್ಲಿದ, ಜಾತಿ-ಧರ್ಮದ ಭೇದ ಇರಬಾರದು ಎಂಬ ನಿಟ್ಟಿನಲ್ಲಿ ನಾವು ಶಾಲೆಯಲ್ಲಿ ಹಿಜಾಬ್‌ ಧರಿಸಲು ಅವಕಾಶ ನೀಡಲಿಲ್ಲ. ಇಲ್ಲದಿದ್ದರೆ ಮತ್ತೊಬ್ಬ ಕೇಸರಿ ಶಾಲು ಹಾಕಿಕೊಂಡು ಬರುತ್ತಾನೆ. ಹೀಗಾಗಿ ಶಾಲೆಯಲ್ಲಿ ಮತೀಯ ಭಾವನೆ ಇರಬಾರದೆಂಬ ದೃಷ್ಟಿಯಲ್ಲಿ ಇದನ್ನು ಜಾರಿಗೆ ತಂದಿದ್ದೆವು. ಇದು ಬಳಿಕ ಸಮವಸ್ತ್ರ್ರ V/s ಹಿಜಾಬ್‌ ಎಂಬಂತೆ ಆಗಬೇಕಿತ್ತು. ಆದರೆ, ದಾರಿ ತಪ್ಪಿಸಿದರು.

ಬಿಜೆಪಿ ಮುಸ್ಲಿಮರ ಸಹಿತ ಯಾರನ್ನೂ ದೂರ ಇಟ್ಟಿಲ್ಲ. ನಾವು ಯಾವುದೇ ಯೋಜನೆಯನ್ನು ಮತೀಯ ಆಧಾರದಲ್ಲಿ ವಿಭಜನೆ ಮಾಡಿಲ್ಲ. 45 ಕೋಟಿ ಜನಧನ್‌ ಖಾತೆಯನ್ನು ತೆರೆಯಲಾಯಿತು. ಮುದ್ರಾ ಯೋಜನೆಯನ್ನು ಜಾರಿಗೆ ತರಲಾಯಿತು. ಈ ಎಲ್ಲದರಲ್ಲೂ ಮುಸ್ಲಿಮರೇ ಹೆಚ್ಚಿನ ಫಲಾನುಭವಿಗಳಿದ್ದಾರೆ.

ಬಿರಿಯಾನಿ ತಿಂದು ಮುಸ್ಲಿಮರನ್ನು ಬಕ್ರಾ ಮಾಡಿದರು!

ಅತಿ ಹೆಚ್ಚು ಬಡವರು, ಶೈಕ್ಷಣಿಕವಾಗಿ ಹಿಂದುಳಿದವರಲ್ಲಿ ಮುಸ್ಲಿಮರೇ ಇದ್ದಾರೆ. ಹಾಗಾದರೆ ಇವರು ಮಾಡಿದ್ದೇನು? ಅವರನ್ನು ಮತ ಬ್ಯಾಂಕ್‌ ಆಗಿ ಬಳಸಿಕೊಂಡು ಬಿರಿಯಾನಿ ತಿಂದಿದ್ದು ಬಿಟ್ಟರೆ ಮಾಡಿದ್ದೇನು? ಮುಸ್ಲಿಮರನ್ನು ಬಕ್ರಾಗಳನ್ನಾಗಿ ಮಾಡಿದರು!

ಪಠ್ಯ ಪರಿಷ್ಕರಣೆ ಚರ್ಚೆಗೆ ಬರಲಿ

ಆಗ ಬರಗೂರು ರಾಮಚಂದ್ರ ಅವರ ಸಮಿತಿ ಶಿಫಾರಸು ಮಾಡಿದ್ದ ವಿಚಾರದಲ್ಲಿ ದೋಷಗಳಿವೆ ಎಂದು ಎನ್‌ಸಿಇಆರ್‌ಟಿ ಸಾರಾಸಗಟಾಗಿ ತಿರಸ್ಕರಿಸಿತ್ತು. ಆ ಕಾರಣಕ್ಕಾಗಿ ನಾವು ಹೊಸ ಪಠ್ಯವನ್ನು ಮಾಡಿದ್ದೆವು. ಈಗ ದೇಶಭಕ್ತಿಯ ಪಠ್ಯವನ್ನು ಹಾಕಿದರೆ ತಪ್ಪೇ? ಹೆಗಡೇವಾರ್‌ ಏನು ಬಿನ್‌ ಲಾಡೆನ್‌ ಅಲ್ಲವಲ್ಲಾ? ಇವರು ಚರ್ಚೆಗೆ ಬರಲಿ.

ಸಿದ್ದರಾಮಯ್ಯ ಸೇರಿದಂತೆ ಕಾಂಗ್ರೆಸ್ಸೇ ಜಾತ್ಯತೀತ ಅಲ್ಲ

ಓಲೈಕೆಯ ರಾಜಕೀಯ ಮಾಡುವ ಸಿದ್ದರಾಮಯ್ಯ ಸೇರಿದಂತೆ ಕಾಂಗ್ರೆಸ್ಸೇ ಜಾತ್ಯತೀತ ಅಲ್ಲ. ಇವರು ಜಾತ್ಯತೀತವಾಗಿದ್ದರೆ ಸಮಾನ ನಾಗರಿಕ ಸಂಹಿತೆಗೆ ಬೆಂಬಲ ನೀಡಬೇಕಿತ್ತು. ಆದರೆ, ಅವರಿಗಿದು ಬೇಡ! ಏಕರೂಪ ನಾಗರಿಕ ಸಂಹಿತೆ ಎಲ್ಲರನ್ನೂ ಸಮಾನವಾಗಿ ನೋಡುವಂತೆ ಹೇಳುತ್ತದೆ. ಇದು ಅಪರಾಧವೇ? ಇದರಲ್ಲಿ ವಿಭಜನೆ ರಾಜಕೀಯ ಇದೆಯಾ? ಅಂಬೇಡ್ಕರ್‌ ಅವರೇ ಸಂವಿಧಾನದಲ್ಲಿ ಇದರ ಬಗ್ಗೆ ಉಲ್ಲೇಖಿಸಿದ್ದಾರೆ. ಸ್ವಾತಂತ್ರ್ಯ ಬಂದು 75 ವರ್ಷ ಆಗಿದೆ. ಇದನ್ನು ಅನುಷ್ಠಾನಕ್ಕೆ ತರಲು ಇನ್ನೆಷ್ಟು ವರ್ಷ ಬೇಕು?

ಅಬಕಾರಿ ಭ್ರಷ್ಟಾಚಾರದ ತನಿಖೆಯಾಗಲಿ

ಕಾಂಗ್ರೆಸ್‌ ಇಂದು ಭ್ರಷ್ಟಾಚಾರದಲ್ಲಿ ತೊಡಗಿದೆ. ಒಂದೇ ಹುದ್ದೆಗೆ ನಾಲ್ವರನ್ನು ನೇಮಕ ಮಾಡಿ ಆದೇಶಿಸಿದೆ. ಅಲ್ಲದೆ, ಅಬಕಾರಿ ಲೇಬಲ್‌ ಅಂಟಿಸುವ ಕಾಮಗಾರಿಯನ್ನು ಎಲ್‌ 3 ಹಂತದ ಸಂಸ್ಥೆಗೆ ನೀಡಲಾಗಿದೆ. 56 ಕೋಟಿ ರೂಪಾಯಿ ಸ್ಕ್ಯಾಮ್‌ ಇದಾಗಿದ್ದು, ತನಿಖೆಗೆ ಬಂದ ಕೂಡಲೇ ರದ್ದುಪಡಿಸಿದ್ದಾರೆ. ಇದರ ತನಿಖೆಯಾಗಲಿ.

ಬಿಜೆಪಿ ಸೋಲಿಗೆ ಸಿ.ಟಿ. ರವಿ ಕೊಟ್ಟ ಮೂರು ಕಾರಣ
ಫಲಾನುಭವಿಗಳನ್ನು ಮತದಾರರನ್ನಾಗಿ ಪರಿವರ್ತನೆ ಮಾಡುವಲ್ಲಿ ನಾವು ವಿಫಲ, ಗ್ಯಾರಂಟಿ ಯೋಜನೆ ಹಾಗೂ ಕಾಂಗ್ರೆಸ್‌ ಹಬ್ಬಿಸಿದ ಸುಳ್ಳು ಸುದ್ದಿಗಳನ್ನು ಜನರ ಮನಸ್ಸಿನಿಂದ ತೆಗೆದುಹಾಕುವುದರಲ್ಲಿ ನಾವು ಸೋತಿದ್ದೇ ಬಿಜೆಪಿ ಸೋಲಿಗೆ ನಾನು ನೀಡುವ ಮೂರು ಕಾರಣ ಎಂದು ಸಿ.ಟಿ. ರವಿ ಹೇಳಿದ್ದಾರೆ.

ಕೋವಿಡ್‌ ವೇಳೆ ದುಡಿಯುವ ಅವಕಾಶ ಕಡಿಮೆಯಾಗಿದ್ದಕ್ಕೆ 5 ಕೆಜಿ ಅಕ್ಕಿ ಜತೆ ಮತ್ತೈದು ಕೆಜಿ ಸೇರಿಸಿ ಪ್ರಧಾನಿ ನರೇಂದ್ರ ಮೋದಿಯವರು ಕೊಟ್ಟರು. ಆದರೆ, ಮೂರು ವರ್ಷದ ಬಳಿಕ ಸಹಜ ಸ್ಥಿತಿಗೆ ಬಂದಾಗ ಹತ್ತರಲ್ಲಿ ಐದು ಕೆಜಿ ಅಕ್ಕಿಯನ್ನು ಕಡಿತ ಮಾಡಿದರು. ಅದೇ ಸಂದರ್ಭದಲ್ಲಿ ಬೇರೆ ತೊಂದರೆಯಿಂದ ಇನ್ನೂ ಒಂದು ಕೆಜಿ ಅಕ್ಕಿಯನ್ನು ಕಡಿತ ಮಾಡಲಾಯಿತು. ಆಗ ಜನರಿಗೆ ಕಾಂಗ್ರೆಸ್‌ ಗ್ಯಾರಂಟಿ ಕನೆಕ್ಟ್‌ ಆಯಿತು. ಇದರ ಜತೆಗೆ ಬಿಜೆಪಿ ರೇಷನ್‌ ಕಾರ್ಡ್‌ ಅನ್ನೇ ತಗೆದುಬಿಡುತ್ತದೆ ಎಂಬ ಅಪ ಪ್ರಚಾರವೂ ಆಯಿತು. ನಾವದನ್ನು ತಿಳಿಹೇಳುವಲ್ಲಿ ಎಡವಿದೆವು.

ನಾಯಕರೆಲ್ಲರೂ ಒಟ್ಟಾಗೋಣ

ದೇಶದಲ್ಲಿ ಲೋಕಸಭಾ ಚುನಾವಣೆ ದೇಶದ ರಕ್ಷಣೆ, ಅಭ್ಯುದಯಕ್ಕಾಗಿ ನಾವು ಮೋದಿಯವರನ್ನು ಅಧಿಕಾರಕ್ಕೆ ತರಬೇಕು. ಇದಕ್ಕಾಗಿ ನಾವು ನಾಯಕರು ಒಗ್ಗಟ್ಟಾಗಬೇಕು. ಆ ಮೂಲಕ ಕಾರ್ಯಕರ್ತರಲ್ಲಿ ಉತ್ಸಾಹ ತುಂಬಬೇಕು.

ಅಣ್ಣಾಮಲೈ ಮಾಸ್‌, ಪಾಪ್ಯುಲರ್‌ ಲೀಡರ್

ಅಣ್ಣಾಮಲೈ ಮಾಸ್‌, ಪಾಪ್ಯುಲರ್‌ ಲೀಡರ್ ಆಗಿದ್ದಾರೆ. ಅವರಿಗೆ ರಾಜ್ಯದಲ್ಲಿ ಅಭಿಮಾನಿಗಳಿದ್ದಾರೆ. ತಮಿಳುನಾಡಿನಲ್ಲಿ ಅವರು ಸಂಚಲನ ಮೂಡಿಸಿದ್ದಾರೆ. ತಮಿಳುನಾಡಿನಲ್ಲಿ ಒಂದು ಮೂಲೆಯಲ್ಲಿರುವ ಬಿಜೆಪಿಯನ್ನು ಚರ್ಚೆಯಾಗುವ ಪಕ್ಷವಾಗಿ ಬದಲಾಯಿಸಿರುವ ಖ್ಯಾತಿ ಅವರದ್ದಾಗಿದೆ. ಹೀಗಾಗಿ ರೇಣುಕಾಚಾರ್ಯ ಅವರು ಏನನ್ನೋ ಹೇಳುವ ಭರದಲ್ಲಿ ಒಬ್ಬ ವ್ಯಕ್ತಿಯನ್ನು ನಗಣ್ಯ ಎನ್ನುವ ರೀತಿ ನೋಡಬಾರದು.

ಅಡ್ಜೆಸ್ಟ್‌ಮೆಂಟ್‌ ಬಗ್ಗೆ ಸಿ.ಟಿ. ರವಿ ಹೇಳಿದ್ದಿಷ್ಟು!

ಬಿಜೆಪಿ ಅವಧಿಯ ಯೋಜನೆಗಳ ತನಿಖೆ ಮಾಡುತ್ತೇವೆ ಎಂದು ಸಚಿವ ಪ್ರಿಯಾಂಕ್‌ ಖರ್ಗೆ ಹೇಳಿದ್ದರು. ಅರ್ಕಾವತಿ ಪ್ರಕರಣದಲ್ಲಿ ನ್ಯಾಯಮೂರ್ತಿ ಕೆಂಪಣ್ಣ ಆಯೋಗ ಕೊಟ್ಟಿರುವ ವರದಿ ಮೇಲೆ ಕ್ರಮ ತೆಗೆದುಕೊಳ್ಳಲಿ ಎಂದು ನಾನು ಹೇಳಿದೆ. ನಾವೇ ಈ ಕೆಲಸವನ್ನು ಮಾಡಬೇಕಿತ್ತು. ಈ ವಿಷಯದಲ್ಲಿ ನಾವು ತಪ್ಪು ಮಾಡಿದ್ದೇವೆ. ನಾವೇ ಮಾಡಿದ್ದರೆ ಪೇಸಿಎಂ ಎಂದು ನಾವು ಹೇಳಿಸಿಕೊಳ್ಳುವ ಪ್ರಮೇಯ ಬರುತ್ತಿರಲಿಲ್ಲ. ಕಟಕಟೆಯಲ್ಲಿ ಕಾಂಗ್ರೆಸ್‌ನವರು ನಿಲ್ಲುತ್ತಿದ್ದರು ಎಂದು ಹೇಳಿದ್ದೆ. ಅದಕ್ಕೆ ಮಾಧ್ಯಮದವರು ಮರು ಪ್ರಶ್ನೆ ಹಾಕಿ, “ಇದೇನಿದು ಅಡ್ಜೆಸ್ಟ್‌ಮೆಂಟ್‌ ರಾಜಕಾರಣವಾ?” ಎಂದು ಕೇಳಿದ್ದರು. ಅದಕ್ಕೆ ನಾನು, “ಇರಬಹುದು” ಎಂದೆ ಅಷ್ಟೆ.

ಜೆಡಿಎಸ್‌ ಜತೆ ಮೈತ್ರಿ ಬಗ್ಗೆ ಏನಂದ್ರು?

ನಾನು ಪಕ್ಷದ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿಯಾಗಿ ಮುಂದಿನ ಲೋಕಸಭಾ ಚುನಾವಣೆಯಲ್ಲಿ ಜೆಡಿಎಸ್‌ ಜತೆ ಮೈತ್ರಿ ಸಂಬಂಧ ಮಾತುಕತೆ ಆಗಿರುವ ವಿಚಾರ ನನಗೆ ಗೊತ್ತಿಲ್ಲ. ಹಾಗಾಗಿ ನಾನು ಏನೂ ಗೊತ್ತಿಲ್ಲದೆ, ಇದನ್ನು ತಿರಸ್ಕರಿಸುವುದೂ ಇಲ್ಲ, ಪುರಸ್ಕರಿಸುವುದೂ ಇಲ್ಲ. ಆದರೆ, ಪಕ್ಷದ ಸಂಸದೀಯ ಮಂಡಳಿಯು ದೇಶ ಹಾಗೂ ಪಕ್ಷದ ಹಿತದೃಷ್ಟಿಯಿಂದ ಈ ಬಗ್ಗೆ ನಿರ್ಧಾರ ಕೈಗೊಳ್ಳುತ್ತದೆ.

ರಾಹುಲ್‌ ಗಾಂಧಿಯನ್ನು ನಿರ್ಲಕ್ಷ್ಯ ಮಾಡಲ್ಲ; ಧಾರಾವಾಹಿ ಕಥೆ ಹೇಳಿದ ಸಿ.ಟಿ. ರವಿ
ನಾನು ರಾಹುಲ್‌ ಗಾಂಧಿ ಸಹಿತ ಯಾರನ್ನೂ ನಿರ್ಲಕ್ಷ್ಯ ಮಾಡುವುದಿಲ್ಲ. ಸಂಕ್ರಾಂತಿ ಎಂಬ ಧಾರಾವಾಹಿಯೊಂದು ಬಹಳ ಹಿಂದೆ ಬರುತ್ತಿತ್ತು. ಅದರಲ್ಲಿ ಬರುವ ತಾತಪ್ಪನ ಪಾತ್ರಧಾರಿಯೊಬ್ಬ ಹೇಳುವ ಮಾತು ನನಗೆ ಈಗಲೂ ಬಹಳ ನೆನಪಿದೆ. “ಮಗಾ ಯಾರನ್ನೂ ನಿರ್ಲಕ್ಷ್ಯ ಮಾಡಬಾರದು. ಗಾಳಿ ಬಂದಾಗ ಒಂದು ಹುಲ್ಲು ಕಡ್ಡಿ ಹೋಗಿ ಗೋಪುರದ ಮೇಲೆ ನಿಂತುಕೊಳ್ಳುತ್ತದೆ. ಜನ ಕೈ ಮುಗಿಯಬೇಕಾದರೆ ಆ ಹುಲ್ಲು ಕಡ್ಡಿಗೂ ಗೌರವ ಸಿಗುತ್ತದೆ. ಹಾಗೇ ಆ ಗಾಳಿಯು ಬಿರುಗಾಳಿಯಾದರೆ ಗಟ್ಟಿಯಾಗಿರುವ ಗೋಪುರವೂ ಬಿದ್ದು ಹೋಗುತ್ತದೆ. ಹೀಗಾಗಿ ಯಾವುದನ್ನೂ ನಿರ್ಲಕ್ಷ್ಯ ಮಾಡಬೇಡ!” ಎಂಬ ಡೈಲಾಗ್‌ ಅನ್ನು ಕೇಳಿದ್ದೆ.

ಇದನ್ನೂ ಓದಿ: ಪ್ರತಾಪ್‌ ಸಿಂಹ ಸಂದರ್ಶನ: ಭರವಸೆ ಈಡೇರಿಸಲು ಸಿದ್ದರಾಮಯ್ಯ ವಿಫಲ; ದೇಶದ ಭವ್ಯ ಭವಿಷ್ಯಕ್ಕಾಗಿ ಮತ್ತೊಮ್ಮೆ ಮೋದಿ ಗೆಲ್ಲಬೇಕು

ಮೋದಿ ಆಯ್ಕೆ ಯಾಕೆ?

ಮನಮೋಹನ್‌ ಸಿಂಗ್‌ ಸರ್ಕಾರವು 10 ವರ್ಷ ಆಡಳಿತ ನಡೆಸಿತ್ತು. ಪ್ರತಿ ಬಾರಿಯೂ ಹಗರಣಗಳು. ಆದರೆ, ನರೇಂದ್ರ ಮೋದಿ ನೇತೃತ್ವದಲ್ಲಿನ 9 ವರ್ಷದ ಆಡಳಿತದಲ್ಲಿ ಒಂದು ಹಗರಣವಿದ್ದರೆ ತೋರಿಸಲಿ. ಹೀಗಾಗಿ ದೇಶದ ಹಿತದೃಷ್ಟಿಯಿಂದ ಜನರು ಮೋದಿಗೆ ಮತ ಹಾಕುತ್ತಾರೆ ಎಂದು ಸಿ.ಟಿ. ರವಿ ಅಭಿಪ್ರಾಯಪಟ್ಟಿದ್ದಾರೆ.

ಕ್ಷಣ ಕ್ಷಣದ ಮಾಹಿತಿಗಾಗಿ Vistara News FaceBook ಪೇಜ್ ಫಾಲೋ ಮಾಡಿ
ಮಹತ್ವದ ಮಾಹಿತಿಗಾಗಿ ವಿಸ್ತಾರ ನ್ಯೂಸ್ ಆ್ಯಪ್ ಉಚಿತವಾಗಿ ಡೌನ್ ಲೋಡ್ ಮಾಡಿಕೊಳ್ಳಿ: Andriod App | IOS App
Continue Reading
Click to comment

Leave a Reply

Your email address will not be published. Required fields are marked *

ಬೆಂಗಳೂರು

2nd PUC Result : ದ್ವಿತೀಯ ಪಿಯುಸಿ ಪರೀಕ್ಷೆ-2ರ ಫಲಿತಾಂಶ ಪ್ರಕಟ; ಬಾಲಕಿಯರದೇ ಮೇಲುಗೈ

2nd PUC Result : ದ್ವಿತೀಯ ಪಿಯುಸಿ ಪರೀಕ್ಷೆ-2ರ ಫಲಿತಾಂಶ ಪ್ರಕಟಗೊಂಡಿದೆ. 52,505 ವಿದ್ಯಾರ್ಥಿಗಳು ಪಾಸಾಗಿದ್ದು, 35.25ರಷ್ಟು ಶೇಕಡವಾರು ಫಲಿತಾಂಶ ಬಂದಿದೆ.

VISTARANEWS.COM


on

By

2nd Puc Result
ಸಾಂದರ್ಭಿಕ ಚಿತ್ರ
Koo

ಬೆಂಗಳೂರು: 2024ನೇ ಸಾಲಿನ ದ್ವಿತೀಯ ಪಿಯುಸಿ ಪರೀಕ್ಷೆ-2ರ ಫಲಿತಾಂಶ ಮೇ 21ರ ಮಧ್ಯಾಹ್ನ 3ಗಂಟೆಗೆ ಪ್ರಕಟಗೊಂಡಿದೆ. ರಾಜ್ಯಾದ್ಯಂತ ಒಟ್ಟು 301 ಪರೀಕ್ಷಾ ಕೇಂದ್ರಗಳಲ್ಲಿ ಏಪ್ರಿಲ್ 29 ರಿಂದ ಮೇ 16ರವರೆಗೆ 2ನೇ ಪರೀಕ್ಷೆ ನಡೆದಿತ್ತು. 7,875 ಮೌಲ್ಯಮಾಪಕರಿಂದ 28 ಕೇಂದ್ರಗಳಲ್ಲಿ ಉತ್ತರ ಪತ್ರಿಕೆಗಳ ಮೌಲ್ಯಮಾಪನ ನಡೆದಿತ್ತು. ಪರೀಕ್ಷೆ 2ಕ್ಕೆ 1,49,824 ವಿದ್ಯಾರ್ಥಿಗಳು ನೋಂದಾಯಿಸಿಕೊಂಡಿದ್ದರು. ಅದರಲ್ಲಿ 1,48,942 ವಿದ್ಯಾರ್ಥಿಗಳು ಹಾಜರಾಗಿದ್ದು, 52,505 ವಿದ್ಯಾರ್ಥಿಗಳು ಪಾಸಾಗಿದ್ದಾರೆ. 35.25ರಷ್ಟು ಶೇಕಡವಾರು ಫಲಿತಾಂಶ ಬಂದಿದೆ. ಇನ್ನೂ ದ್ವಿತೀಯ ಪಿಯುಸಿ ಪರೀಕ್ಷೆ ಫಲಿತಾಂಶವನ್ನು ಇಲಾಖೆಯ ವೆಬ್‌ಸೈಟ್‌ karresults.nic.in ನಲ್ಲಿ ನೋಡಬಹುದಾಗಿದೆ.

ಇನ್ನೂ ಪರೀಕ್ಷೆ 1 ಮತ್ತು ಪರೀಕ್ಷೆ 2ರಲ್ಲಿ ವಿಷಯವಾರು ಗಳಿಸಿದ ಅತಿಹೆಚ್ಚು ಅಂಕಗಳನ್ನು ಪರಿಗಣಿಸಿ ಅಂತಿಮ ಫಲಿತಾಂಶವನ್ನು ಪ್ರಕಟಿಸಲಾಗುತ್ತಿದೆ. ಪಿಯುಸಿ ಪರೀಕ್ಷೆಗಳನ್ನು ಎದುರಿಸಿದ ಎಲ್ಲಾ ವಿದ್ಯಾರ್ಥಿಗಳು ರೋಲ್ ನಂಬರ್ ಆಧರಿಸಿ ತಮ್ಮ ಫಲಿತಾಂಶಗಳನ್ನು ಈ ವೆಬ್‌ಸೈಟ್‌ನಲ್ಲಿ ವೀಕ್ಷಿಸಬಹುದು. ವಿದ್ಯಾರ್ಥಿಗಳು ತಮ್ಮ ನೋಂದಣಿ ಸಂಖ್ಯೆ ಮತ್ತು ವಿಷಯ ಸಂಯೋಜನೆ/ಸ್ಟ್ರೀಮ್ ಅನ್ನು ಬಳಸಿಕೊಂಡು ಅದನ್ನು ಪರಿಶೀಲಿಸಬಹುದು. ವಿದ್ಯಾರ್ಥಿಗಳು ಈ ಕೆಳಗಿನ ಹಂತಗಳನ್ನು ಅನುಸರಿಸುವ ಮೂಲಕ ಫಲಿತಾಂಶವನ್ನು ಪರಿಶೀಲಿಸಬಹುದು..

ಹಂತಗಳು ಏನು?

-karresults.nic.in ನಲ್ಲಿ ಕರ್ನಾಟಕ ಫಲಿತಾಂಶ ಪೋರ್ಟಲ್‌ಗೆ ಭೇಟಿ ನೀಡಿ.
-ಮುಖಪುಟದಲ್ಲಿ ನೀಡಲಾದ ಪಿಯುಸಿ 2 ಪರೀಕ್ಷೆಯ ಫಲಿತಾಂಶದ ಲಿಂಕ್ ಅನ್ನು ತೆರೆಯಿರಿ.
-ಲಾಗಿನ್ ಪುಟದಲ್ಲಿ, ನಿಮ್ಮ KSEAB ನೋಂದಣಿ ಸಂಖ್ಯೆಯನ್ನು ಒದಗಿಸಿ; ವಿಷಯ ಸಂಯೋಜನೆ ಅಥವಾ ಸ್ಟ್ರೀಮ್ ಅನ್ನು ಆಯ್ಕೆ ಮಾಡಿ (ವಿಜ್ಞಾನ/ಕಲೆ/ವಾಣಿಜ್ಯ)
-ನಿಮ್ಮ 2ನೇ ಪಿಯುಸಿ ಫಲಿತಾಂಶವನ್ನು ಮುಂದಿನ ಪುಟದಲ್ಲಿ ಪರಿಶೀಲಿಸಿ.

ಇದನ್ನೂ ಓದಿ: CET Result: ದ್ವಿತೀಯ ಪಿಯು 2ನೇ ಪರೀಕ್ಷೆ ಬಳಿಕವೇ ಸಿಇಟಿ ಫಲಿತಾಂಶ; ಮೇ 30 ಅಥವಾ 31ಕ್ಕೆ ಪ್ರಕಟ?

ದ್ವಿತೀಯ ಪಿಯು ವಾರ್ಷಿಕ ಪರೀಕ್ಷೆ -1ರಲ್ಲಿ ಕೆಲವರು ಅನುತ್ತೀರ್ಣರಾಗಿದ್ದರೆ, ಮತ್ತೆ ಕೆಲವರಿಗೆ ಅಂಕ ಕಡಿಮೆ ಬಂದಿದೆ ಎಂಬ ಅಸಮಾಧಾನ ಇದ್ದವರಿಗಾಗಿ ಈ ಅವಕಾಶ ಕಲ್ಪಿಸಲಾಗಿತ್ತು. 2024ರ ದ್ವಿತೀಯ ಪಿಯುಸಿ ಪರೀಕ್ಷೆ-2ಕ್ಕೆ ಪುನರಾವರ್ತಿತ ಅಭ್ಯರ್ಥಿಗಳು ಹಾಗೂ ಫಲಿತಾಂಶ ಉತ್ತಮಪಡಿಸಿಕೊಳ್ಳಲು ಬಯಸುವ ವಿದ್ಯಾರ್ಥಿಗಳು ಪರೀಕ್ಷೆಯನ್ನು ಬರೆದಿದ್ದರು.

ಈ ಸಂಗತಿಯ ಕುರಿತು ನಿಮ್ಮ ಅನಿಸಿಕೆ ಏನು? ಕಾಮೆಂಟ್ ಮೂಲಕ ತಿಳಿಸಿ

Continue Reading

ಬೆಂಗಳೂರು

‌DK Shivakumar: ಕೆಪಿಸಿಸಿ ಅಧ್ಯಕ್ಷನಾಗಿ ಎಷ್ಟು ದಿನ ಇರುತ್ತೇನೋ ಗೊತ್ತಿಲ್ಲ; ಡಿಕೆಶಿ ಹೀಗೆ ಹೇಳಿದ್ಯಾಕೆ?

‌DK Shivakumar: ನಾನು ಒಂದು ವರ್ಷ ಪೂರೈಸಿದ್ದು ಮುಖ್ಯವಲ್ಲ. ನಾಲ್ಕು ವರ್ಷಗಳಲ್ಲಿ ನನ್ನ ನಾಯಕತ್ವದಲ್ಲಿ ಪಕ್ಷ ಅಧಿಕಾರಕ್ಕೆ ಬಂದಿದೆ, ಅದು ಮುಖ್ಯ ಎಂಬ ಮಾತನ್ನೂ ಇದೇ ವೇಳೆ ಹೇಳಿದ್ದಾರೆ. ಅಂದರೆ, ಅವರಿಲ್ಲಿ ಪಕ್ಷ ಸಂಘಟನೆ ಬಗ್ಗೆ ಮಾತುಗಳನ್ನು ಆಡಿದ್ದಾರೆ. ತಾವು ಪಕ್ಷಕ್ಕಾಗಿ ಗಟ್ಟಿಯಾಗಿ ನಿಂತಿದ್ದರಿಂದ ಪಕ್ಷವು ಅಧಿಕಾರಕ್ಕೆ ಬಂದಿದೆ. ಅದೇ ರೀತಿಯಾಗಿ ಪಕ್ಷದ ನಾಯಕತ್ವವನ್ನು, ಉನ್ನತ ಹುದ್ದೆಯನ್ನು ಕೇಳುವವರು ಕೆಲಸ ಮಾಡಿ ತೋರಿಸಬೇಕು ಎಂಬ ನೇರ ಸಂದೇಶವನ್ನು ಡಿ.ಕೆ. ಶಿವಕುಮಾರ್‌ ರವಾನೆ ಮಾಡಿದ್ದಾರೆ.

VISTARANEWS.COM


on

DK Shivakumar speaks about KPCC president post
Koo

ಬೆಂಗಳೂರು: ರಾಜ್ಯದಲ್ಲಿ ಕಾಂಗ್ರೆಸ್ ಸರ್ಕಾರಕ್ಕೆ ಒಂದು ವರ್ಷದ ಪೂರೈಕೆ ಹಿನ್ನೆಲೆಯಲ್ಲಿ ಕೆಪಿಸಿಸಿ ಘಟಕದಿಂದ ಏರ್ಪಡಿಸಲಾಗಿದ್ದ ಸನ್ಮಾನ ಕಾರ್ಯಕ್ರಮದಲ್ಲಿ ಮಾತನಾಡಿದ ಡಿಸಿಎಂ, ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್‌ (DK Shivakumar) ಅವರು ತಮ್ಮ ರಾಜ್ಯಾಧ್ಯಕ್ಷ ಸ್ಥಾನದ ಬಗ್ಗೆ ಮಾತನಾಡಿದ್ದಾರೆ. ನಾನು ಸದ್ಯ ಕೆಪಿಸಿಸಿ ಅಧ್ಯಕ್ಷನಾಗಿದ್ದೇನೆ. ಆದರೆ, ಈ ಸ್ಥಾನದಲ್ಲಿ ಇನ್ನೆಷ್ಟು ದಿನ ಇರುತ್ತೇನೆ ಎಂಬುದು ಗೊತ್ತಿಲ್ಲ ಎಂದು ಹೇಳಿದ್ದಾರೆ. ಇದೀಗ ಕಾಂಗ್ರೆಸ್‌ ವಲಯದಲ್ಲಿ ಸಾಕಷ್ಟು ಚರ್ಚೆಗೆ ಕಾರಣವಾಗಿದೆ. ಇದರ ಹಿಂದೆ ಏನಾದರೂ ಉದ್ದೇಶ ಇದೆಯಾ? ಅವರು ಹೀಗೆ ಹೇಳಿದ್ದು ಯಾಕೆ ಎಂದೆಲ್ಲ ಚರ್ಚೆಗಳು ನಡೆಯುತ್ತಿವೆ.

ಅಷ್ಟಕ್ಕೂ ಹಾಲಿ ಕೆಪಿಸಿಸಿ ಅಧ್ಯಕ್ಷರಾಗಿರುವ ಡಿ.ಕೆ. ಶಿವಕುಮಾರ್‌ ಹೇಳಿದ್ದೇನೆಂದರೆ, “ನಾನು ಸದ್ಯ ಕೆಪಿಸಿಸಿ ಅಧ್ಯಕ್ಷನಾಗಿದ್ದೇನೆ. ಇನ್ನೂ ಎಷ್ಟು ದಿನ ಈ ಸ್ಥಾನದಲ್ಲಿ ಇರುತ್ತೇನೋ, ಇಲ್ಲವೋ ಅನ್ನುವುದು ಗೊತ್ತಿಲ್ಲ. ನಮ್ಮ ಪಕ್ಷದ ನಾಯಕತ್ವ ಬುನಾದಿ ಗಟ್ಟಿ ಮಾಡಬೇಕು. ಬೂತ್ ಮಟ್ಟದಲ್ಲಿ ಗಟ್ಟಿ ಮಾಡಬೇಕು” ಎಂದು ಕಿವಿಮಾತು ಹೇಳಿದ್ದಾರೆ.

ನಾನು ಒಂದು ವರ್ಷ ಪೂರೈಸಿದ್ದು ಮುಖ್ಯವಲ್ಲ. ನಾಲ್ಕು ವರ್ಷಗಳಲ್ಲಿ ನನ್ನ ನಾಯಕತ್ವದಲ್ಲಿ ಪಕ್ಷ ಅಧಿಕಾರಕ್ಕೆ ಬಂದಿದೆ, ಅದು ಮುಖ್ಯ ಎಂಬ ಮಾತನ್ನೂ ಇದೇ ವೇಳೆ ಹೇಳಿದ್ದಾರೆ. ಅಂದರೆ, ಅವರಿಲ್ಲಿ ಪಕ್ಷ ಸಂಘಟನೆ ಬಗ್ಗೆ ಮಾತುಗಳನ್ನು ಆಡಿದ್ದಾರೆ. ತಾವು ಪಕ್ಷಕ್ಕಾಗಿ ಗಟ್ಟಿಯಾಗಿ ನಿಂತಿದ್ದರಿಂದ ಪಕ್ಷವು ಅಧಿಕಾರಕ್ಕೆ ಬಂದಿದೆ. ಅದೇ ರೀತಿಯಾಗಿ ಪಕ್ಷದ ನಾಯಕತ್ವವನ್ನು, ಉನ್ನತ ಹುದ್ದೆಯನ್ನು ಕೇಳುವವರು ಕೆಲಸ ಮಾಡಿ ತೋರಿಸಬೇಕು ಎಂಬ ನೇರ ಸಂದೇಶವನ್ನು ಡಿ.ಕೆ. ಶಿವಕುಮಾರ್‌ ರವಾನೆ ಮಾಡಿದ್ದಾರೆ.

ಹೊಸ ನಾಯಕತ್ವ ಬೆಳೆಸುವ ಎಚ್ಚರಿಕೆ!

ನಾಲ್ಕು ವೋಟ್ ಹಾಕಿಸದೇ ಬಂದು ಇಲ್ಲಿ ಸ್ಥಾನಮಾನ ಕೇಳುತ್ತೀರಾ? ಮೊದಲು ನಿಮ್ಮ ಬೂತ್‌ನಲ್ಲಿ ಸಂಘಟನೆ ಮಾಡಿ. ಬೂತ್ ಲೀಡ್ ಕೊಡಿಸಿ ಬಂದು ನಾಯಕತ್ವ ಕೇಳಿ. ಇಲ್ಲದೆ ಹೋದರೆ ನಾಯಕತ್ವ ಕೊಡಲ್ಲ ಎಂದು ಪಕ್ಷದ ಮುಖಂಡರಿಗೆ, ಕಾರ್ಯಕರ್ತರಿಗೆ ಡಿ.ಕೆ. ಶಿವಕುಮಾರ್‌ ಚಾಟಿ ಬೀಸಿದ್ದಾರೆ.

ನಾಲ್ಕು ವೋಟ್ ಹಾಕಿಸದೇ ಬಂದು ಇಲ್ಲಿ ಸ್ಥಾನಮಾನ ಕೇಳಿದರೆ ಹೇಗೆ? ಬಿಳಿ‌ ಜುಬ್ಬಾ, ಬಿಳಿ‌ ಕಾರು ತೆಗೆದುಕೊಂಡು ಬಂದು ಸ್ಥಾನಗಳನ್ನು ಕೇಳುವುದಲ್ಲ. ಮೊದಲು ಸಂಘಟನೆ ‌ಮಾಡಿ, ಇಲ್ಲದಿದ್ದರೆ ಜಾಗ ಖಾಲಿ ಮಾಡಿ. ನಾವು ಹೊಸ ‌ನಾಯಕತ್ವವನ್ನು ಬೆಳೆಸುತ್ತೇವೆ ಎಂಬ ಎಚ್ಚರಿಕೆಯನ್ನೂ ನೀಡಿದ್ದಾರೆ. ಬೂತ್‌ ಮಟ್ಟದಲ್ಲಿ ಪಕ್ಷ ಬಲಗೊಳ್ಳದಿದ್ದರೆ ದೂರದೃಷ್ಟಿಯಲ್ಲಿ ಪಕ್ಷವು ಉಳಿದುಕೊಳ್ಳುವುದು ಕಷ್ಟ ಎಂಬ ಹಿನ್ನೆಲೆಯಲ್ಲಿ ಮುಖಂಡರಿಗೆ ಬಿಸಿ ಮುಟ್ಟಿಸುವ ಪ್ರಯತ್ನವನ್ನು ಡಿ.ಕೆ. ಶಿವಕುಮಾರ್‌ ಮಾಡಿದ್ದಾರೆನ್ನಲಾಗಿದೆ.

ರಾಜೀವ್‌ ಗಾಂಧಿ ಪ್ರತಿಮೆ ಬದಲಿಸಿದ್ದೇನೆ

ರಾಜೀವ್ ಗಾಂಧಿಯವರ ಪ್ರಾಣ ಎಲ್ಲಿ ಹೋಯಿತೋ ಅಲ್ಲಿ ಕನಕಪುರದ ಕಲ್ಲು ಹಾಕಿದ್ದೇನೆ. ಸೋನಿಯಾ ಗಾಂಧಿ ಸೂಚನೆ ಮೇರೆಗೆ ಹಾಕಿದ್ದೇನೆ. ನನಗೆ ಕನಕಪುರ ಬಂಡೆ ಅಂತಾರಲ್ಲ. ನಮ್ಮೂರ ಬಂಡೆಯ ಕಲ್ಲು ಅಲ್ಲಿ ತೆಗೆದುಕೊಂಡು ಹೋಗಿ ಹಾಕಿದ್ದೇನೆ. ಅಲ್ಲಿ ಹೋದಾಗ ನೋಡಿ. ಬೆಂಗಳೂರಿನಲ್ಲಿ ರಾಜೀವ್ ಗಾಂಧಿ ಪ್ರತಿಮೆಯನ್ನು ಬದಲಾವಣೆ ಮಾಡಿದ್ದೇವೆ. ನಾನು ಬೆಂಗಳೂರು ಉಸ್ತುವಾರಿ ಸಚಿವನಾದ ಮೇಲೆ ಮೊದಲು ಅನುದಾನ ಬಿಡುಗಡೆ ‌ಮಾಡಿದ್ದು, ಸಹ ಇದಕ್ಕೇ ಆಗಿದೆ. ಅದರಂತೆ ರಾಜೀವ್ ಗಾಂಧಿ ಪ್ರತಿಮೆ ಬದಲಾವಣೆ ಮಾಡಿದ್ದು, ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಉದ್ಘಾಟನೆ ಮಾಡಿದರು ಎಂದು ಡಿ.ಕೆ. ಶಿವಕುಮಾರ್ ಹೇಳಿದರು.

Prashant Kishor: ಈ ಬಾರಿ ಮೋದಿಗೆ ಹಿನ್ನಡೆ ಆಗುತ್ತಾ? ಪ್ರಶಾಂತ್ ಕಿಶೋರ್ ಲೇಟೆಸ್ಟ್ ಲೆಕ್ಕಾಚಾರ ಹೀಗಿದೆ

ನವದೆಹಲಿ: ಲೋಕಸಭಾ ಚುನಾವಣೆ (Lok Sabha Election)ಯ ಮೊದಲ 5 ಹಂತಗಳ ಮತದಾನ ಮುಗಿದಿದೆ. ಇನ್ನು ಎರಡು ಹಂತಗಳ ಮತದಾನ ಬಾಕಿ ಇದ್ದು, ಸೋಲು-ಗೆಲುವಿನ ಲೆಕ್ಕಾಚಾರ ಆರಂಭವಾಗಿದೆ. ಈ ಮಧ್ಯೆ ಚುನಾವಣಾ ತಂತ್ರಜ್ಞ ಪ್ರಶಾಂತ್ ಕಿಶೋರ್ (Prashant Kishor) ಫಲಿತಾಂಶವನ್ನು ಊಹಿಸಿದ್ದು, 2019ರ ಚುನಾವಣೆಗೆ ಹೋಲಿಸಿದರೆ ಈ ಬಾರಿ ಬಿಜೆಪಿ ಹೆಚ್ಚುವರಿ ಸ್ಥಾನಗಳನ್ನು ಗೆಲ್ಲಲಿದೆ ಎಂದು ಹೇಳಿದ್ದಾರೆ.

ಸಂದರ್ಶನವೊಂದರಲ್ಲಿ ಮಾತನಾಡಿದ ಅವರು, ಬಿಜೆಪಿ ಸ್ಪಷ್ಟ ಬಹುಮತ ಹೊಂದಲಿದೆ ಎಂದು ವಿಶ್ವಾಸ ವ್ಯಕ್ತಪಡಿಸಿದ್ದಾರೆ. ʼʼಈ ಚುನಾವಣೆಯಲ್ಲಿ ಬಿಜೆಪಿ ಅತ್ಯುತ್ತಮ ಪ್ರದರ್ಶನ ತೋರಲಿದೆ. ಜತೆಗೆ ಸೀಟುಗಳ ಸಂಖ್ಯೆಯನ್ನೂ ವೃದ್ಧಿಸಿಕೊಳ್ಳಲಿದೆ. ಅದರಲ್ಲಿಯೂ ದೇಶದ ಉತ್ತರ ಮತ್ತು ಪಶ್ಚಿಮ ಭಾಗಗಳಲ್ಲಿ ಬಿಜೆಪಿ ಇನ್ನಷ್ಟು ಶಕ್ತವಾಗಲಿದೆ. ಅಲ್ಲದೆ ಪೂರ್ವ ಮತ್ತು ದಕ್ಷಿಣ ಭಾಗಗಳಲ್ಲಿಯೂ ಸೀಟು ಹೆಚ್ಚಳವಾಗುವ ನಿರೀಕ್ಷೆ ಇದೆʼʼ ಎಂದು ಅಭಿಪ್ರಾಯಪಟ್ಟಿದ್ದಾರೆ.

ವಿಶ್ಲೇಷಕರ ಅಭಿಪ್ರಾಯದ ಮಧ್ಯೆ ಕಿಶೋರ್‌ ಮಾತು

ಬಿಜೆಪಿ ಬಹುಮತ ಪಡೆಯುವ ಸಾಧ್ಯತೆಯಿಲ್ಲ ಮತ್ತು ಮೊದಲ ಕೆಲವು ಹಂತಗಳ ಮತದಾನ ಆಡಳಿತ ಪಕ್ಷದ ಪರವಾಗಿಲ್ಲ ಎಂದು ರಾಜಕೀಯ ವಿಶ್ಲೇಷಕರು ಅಭಿಪ್ರಾಯ ಪಟ್ಟಿದ್ದು, ಕೆಲವು ವರದಿಗಳು ಇದನ್ನೇ ಊಹಿಸಿರುವ ಮಧ್ಯೆ ಪ್ರಶಾಂತ್‌ ಕಿಶೋರ್‌ ಈ ರೀತಿ ಹೇಳಿಕೆ ನೀಡಿರುವುದು ಕಮಲ ಪಾಳಯಕ್ಕೆ ಕೊಂಚ ಮಟ್ಟಿನ ಸಮಾಧಾನ ತಂದಿತ್ತಿದೆ. ಆದಾಗ್ಯೂ ಅವರು ರಾಜ್ಯವಾರು ಫಲಿತಾಂಶಗಳನ್ನು ಊಹಿಸಲು ನಿರಾಕರಿಸಿದ್ದಾರೆ.

ಮೋದಿ ಬ್ರ್ಯಾಂಡ್‌ ಕುಸಿತ

ಬಿಜೆಪಿಯ ಬಗ್ಗೆ ಈಗಲೂ ಜನರಲ್ಲಿ ಸಕಾರಾತ್ಮಕ ಭಾವನೆ ಇದೆ ಎಂದಿರುವ ಪ್ರಶಾಂತ್‌ ಕಿಶೋರ್‌, ಮೋದಿ ಬ್ರ್ಯಾಂಡ್‌ ಮಾತ್ರ ಕುಸಿಯುತ್ತಿದೆ. ಪ್ರಧಾನಿಯ ಪ್ರಭಾವ ಕ್ಷೀಣಿಸುತ್ತಿದೆ ಎಂದು ಹೇಳಿದ್ದಾರೆ. ಇತ್ತ ವಿರೋಧ ಪಕ್ಷಗಳ ಕಾರ್ಯ ವೈಖರಿಯನ್ನೂ ಅವರು ಟೀಕಿಸಿದ್ದಾರೆ. ಬಿಜೆಪಿ ವಿರುದ್ಧ ಪ್ರಯೋಗಿಸಬಹುದಾದ ಅನೇಕ ಅಸ್ತ್ರಗಳನ್ನು, ಅವಕಾಶಗಳನ್ನು ʼಇಂಡಿಯಾʼ ಮೈತ್ರಿಕೂಟ ಸಮರ್ಪಕವಾಗಿ ಬಳಸಿಕೊಳ್ಳುತ್ತಿಲ್ಲ ಎಂದು ಹೇಳಿದ್ದಾರೆ. ಕಾಂಗ್ರೆಸ್‌ ರಾಜ್ಯ ವಿಧಾನಸಭಾ ಚುನಾವಣೆಗಳ ಮೇಲೆ ಗಮನ ಕೇಂದ್ರೀಕರಿಸಿದ ಹಿನ್ನೆಲೆಯಲ್ಲಿ ಸೆಪ್ಟೆಂಬರ್ ಮತ್ತು ಡಿಸೆಂಬರ್ ನಡುವಿನ ನಿರ್ಣಾಯಕ ತಿಂಗಳುಗಳು ವ್ಯರ್ಥವಾಗಿದೆ. ಇದು ʼಇಂಡಿಯಾʼ ಬಣದ ಮೇಲೆ ನಕಾರಾತ್ಮಕ ಪರಿಣಾಮ ಬೀರಿದೆ ಎಂದು ಅವರು ಒತ್ತಿ ಹೇಳಿದ್ದಾರೆ. ಡಿಸೆಂಬರ್‌ನಲ್ಲಿ ಮೂರು ರಾಜ್ಯಗಳಲ್ಲಿನ ಬಿಜೆಪಿಯ ಗೆಲುವು ಮತ್ತು ಜನವರಿಯಲ್ಲಿ ನಡೆದ ಅಯೋಧ್ಯೆ ರಾಮ ಮಂದಿರದ ಉದ್ಘಾಟನೆ ಕಮಲ ಪಡೆಯ ಗೆಲುವಿಗೆ ಇನ್ನಷ್ಟು ಶಕ್ತಿ ನೀಡಲಿದೆ ಎಂದಿದ್ದಾರೆ.

ಇದನ್ನೂ ಓದಿ: Lok Sabha Election 2024: ಪ್ರತಿಪಕ್ಷಗಳಿಗೆ ರೆಡ್‌ ಅಲರ್ಟ್‌ ನೀಡಿದ ಪ್ರಶಾಂತ್‌ ಕಿಶೋರ್‌; ಏನವರ ಚುನಾವಣಾ ಲೆಕ್ಕಾಚಾರ?

ರಾಹುಲ್‌ ಗಾಂಧಿಗೆ ಸಲಹೆ

ಕಾಂಗ್ರೆಸ್‌ ನಾಯಕ ರಾಹುಲ್ ಗಾಂಧಿ ಅವರಿಗೆ ಸಲಹೆ ನೀಡಿದ ಪ್ರಶಾಂತ್‌ ಕಿಶೋರ್, ಚುನಾವಣಾ ಫಲಿತಾಂಶಗಳು ಕಾಂಗ್ರೆಸ್ ಪರವಾಗಿಲ್ಲದಿದ್ದರೆ ಐದು ವರ್ಷಗಳ ವಿರಾಮ ತೆಗೆದುಕೊಳ್ಳುವಂತೆ ಸೂಚಿಸಿದ್ದಾರೆ. ಮೂರನೇ ಅವಧಿಯಲ್ಲಿ ಬಿಜೆಪಿಗೆ ಅನೇಕ ಕಠಿಣ ಸವಾಲು ಎದುರಾಗಲಿದೆ ಎಂದು ಅವರು ಎಚ್ಚರಿಸಿದ್ದಾರೆ. ಭೂ ಮಸೂದೆ ವಿರೋಧಿ ಪ್ರತಿಭಟನೆ, ಪೌರತ್ವ ತಿದ್ದುಪಡಿ ಕಾಯ್ದೆ (ಸಿಎಎ)ಯ ವಿರೋಧಿಸಿ ನಡೆದ ಪ್ರತಿಭಟನೆ ಮತ್ತು ರೈತರ ಹೋರಾಟವನ್ನು ಉಲ್ಲೇಖಿಸಿ ಅವರು ಸವಾಲುಗಳ ಬಗ್ಗೆ ಎಚ್ಚರಿಕೆ ನೀಡಿದ್ದಾರೆ. ಈ ಎಲ್ಲ ಸವಾಲುಗಳಿಂದ ಮೋದಿ ದುರ್ಬಲ ಪ್ರಧಾನಿ ಎನಿಸಿಕೊಳ್ಳಲಿದ್ದಾರೆ ಎಂದೂ ಅಭಿಪ್ರಾಯಪಟ್ಟಿದ್ದಾರೆ.

Continue Reading

ಕ್ರೈಂ

Road Accident : ತಾಯಿ-ಮಗನ ಬಲಿ ಪಡೆದ ಕಂಟೇನರ್‌; ಆಟೋ ಪ್ರಯಾಣಿಕ ಸೇರಿ ಸವಾರರಿಬ್ಬರ ಪ್ರಾಣ ಕಸಿದ ಬೈಕ್‌

Road Accident : ಹಾಸನ ಹಾಗೂ ಯಾದಗಿರಿ, ಮಂಗಳೂರಿನಲ್ಲಿ ಭೀಕರ ಅಪಘಾತ ಸಂಭವಿಸಿದ್ದು, ಐವರು ಸ್ಥಳದಲ್ಲೇ ಮೃತಪಟ್ಟಿದ್ದಾರೆ. ಹಾಸನದಲ್ಲಿ ತಾಯಿ-ಮಗ ಮೃತಪಟ್ಟರೆ, ಯಾದಗಿರಿಯಲ್ಲಿ ಬೈಕ್‌ ಸವಾರರಿಬ್ಬರು ಪ್ರಾಣವನ್ನೇ ಕಳೆದುಕೊಂಡಿದ್ದಾರೆ. ಇತ್ತ ಮಂಗಳೂರಿನಲ್ಲಿ ಆಟೋದಲ್ಲಿ ಪ್ರಯಾಣಿಸುತ್ತಿದ್ದ ಪ್ರಯಾಣಿಕ ಅಪಘಾತದಲ್ಲಿ ಮೃತಪಟ್ಟಿದ್ದಾನೆ.

VISTARANEWS.COM


on

By

Road Accident
Koo

ಹಾಸನ/ಯಾದಗಿರಿ: ಪ್ರತ್ಯೇಕ ಕಡೆಗಳಲ್ಲಿ ಸಂಭವಿಸಿದ ಅಪಘಾತದಲ್ಲಿ (Road Accident) ತಾಯಿ-ಮಗ ಸೇರಿ ಬೈಕ್‌ ಸವಾರರಿಬ್ಬರು, ಆಟೋ ಪ್ರಯಾಣಿಕ ದಾರುಣವಾಗಿ ಮೃತಪಟ್ಟಿದ್ದಾರೆ. ಐವರಿಗೆ ಗಂಭೀರ ಗಾಯಗೊಂಡಿದ್ದಾರೆ.

ಹಾಸನ ಜಿಲ್ಲೆಯ ಸಕಲೇಶಪುರ ತಾಲೂಕಿನ ರಾಷ್ಟ್ರೀಯ ಹೆದ್ದಾರಿ 75ರ ಕೆಂಪುಹೊಳೆ ಸಮೀಪ ಇನೋವಾ ಕಾರು ಹಾಗೂ ಕಂಟೇನರ್ ನಡುವೆ ಮುಖಾಮುಖಿ ಡಿಕ್ಕಿಯಾಗಿದೆ. ಪರಿಣಾಮ ಕಾರಿನಲ್ಲಿದ್ದ ತಾಯಿ-ಮಗ ಸ್ಥಳದಲ್ಲೇ ಮೃತಪಟ್ಟರೆ, ಉಳಿದ ನಾಲ್ವರಿಗೆ ಗಂಭೀರ ಗಾಯವಾಗಿದೆ. ಶಫೀಕ್ (20), ಸಫಿಯಾ (50) ಮೃತ ದುರ್ದೈವಿಗಳು.

ಕಂಟೇನರ್ ಲಾರಿ ಮಂಗಳೂರಿನಿಂದ ಬೆಂಗಳೂರು ಕಡೆಗೆ ಹೋಗುತ್ತಿತ್ತು. ಇನೋವಾ ಕಾರು ಬೆಂಗಳೂರಿನಿಂದ ಮಂಗಳೂರು ಕಡೆಗೆ ಹೋಗುತ್ತಿದ್ದಾಗ ಕೆಂಪುಹೊಳೆ ಸಮೀಪ ಮುಖಾಮುಖಿ ಡಿಕ್ಕಿಯಾಗಿದೆ. ಗಾಯಾಳುಗಳನ್ನು ಮಂಗಳೂರಿನ ಫಾದರ್ ಮುಲ್ಲರ್ ಆಸ್ಪತ್ರೆಗೆ ರವಾನೆ ಮಾಡಲಾಗಿದೆ. ಮೃತರು ಹಾಗೂ ಗಾಯಾಳುಗಳು ದಕ್ಷಿಣ ಕನ್ನಡದ ಬಂಟ್ವಾಳ ಮೂಲದವರು ಎಂದು ತಿಳಿದು ಬಂದಿದೆ.

ಸ್ಥಳಕ್ಕೆ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದು, ಛಿದ್ರವಾಗಿ ಬಿದ್ದಿದ್ದ ಕಾರನ್ನು ತೆರವುಗೊಳಿಸಿದ್ದಾರೆ. ಮೃತದೇಹಗಳನ್ನು ಮರಣೋತ್ತರ ಪರೀಕ್ಷೆಗೆ ರವಾನಿಸಲಾಗಿದೆ. ಸಕಲೇಶಪುರ ಗ್ರಾಮಾಂತರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ.

ಇದನ್ನೂ ಓದಿ: Love Case : ಮನೆಗೆ ಬಂದ ಪ್ರೇಮಿಗೆ ಕೊತ ಕೊತ ಕುದಿಯುವ ನೀರು ಎರಚಿದ ಯುವತಿ ತಂದೆ!

ಯಾದಗಿರಿಯಲ್ಲಿ ಬೈಕ್‌ಗಳ ಡಿಕ್ಕಿ, ಇಬ್ಬರು ಸವಾರರು ಸಾವು

ಯಾದಗಿರಿ ತಾಲೂಕಿನ ಸೈದಾಪುರ ಪಟ್ಟಣದಲ್ಲಿ ನಿನ್ನೆ ಸೋಮವಾರ ಸಂಜೆ ಎರಡು ಬೈಕ್‌ಗಳ ಮಧ್ಯೆ ಮುಖಾಮುಖಿ ಡಿಕ್ಕಿಯಾಗಿದೆ. ಡಿಕ್ಕಿ ರಭಸಕ್ಕೆ ಸವಾರರಿಬ್ಬರು ಸ್ಥಳದಲ್ಲೇ ಮೃತಪಟ್ಟಿದ್ದು, ಓರ್ವ ಸವಾರನಿಗೆ ಗಂಭೀಯ ಗಾಯವಾಗಿದೆ. ಗಾಯಾಳನ್ನು ರಾಯಚೂರಿನ ರಿಮ್ಸ್ ಆಸ್ಪತ್ರೆಗೆ ದಾಖಲು ಮಾಡಲಾಗಿದೆ.

ಸೈದಾಪುರದ ಸ್ವಾಮಿ ವಿವೇಕಾನಂದ ಶಾಲೆಯ ಮುಂಭಾಗ ಅಪಘಾತ ಸಂಭವಿಸಿದೆ. ಸೈದಾಪುರ ನಿವಾಸಿ ಮೌನೇಶ್ (24) ಹಾಗೂ ಕೊಂಡಾಪುರ ನಿವಾಸಿ ಅಶೋಕ್ (21) ಮೃತ ಬೈಕ್ ಸವಾರರು. ಸೈದಾಪುರ ಪೊಲೀಸ್ ಠಾಣೆಯಲ್ಲಿ ಕೇಸ್ ದಾಖಲಾಗಿದೆ.

ಆಟೋ-ಬೈಕ್‌ ಡಿಕ್ಕಿ, ಹಾರಿ ಬಿದ್ದ ಪ್ರಯಾಣಿಕ ಸಾವು

ಆಟೋ ಮತ್ತು ಬೈಕ್ ನಡುವೆ ಮುಖಾಮುಖಿ ಡಿಕ್ಕಿಯಾಗಿದೆ. ಡಿಕ್ಕಿ‌ ರಭಸಕ್ಕೆ ಆಟೋದಲ್ಲಿದ್ದ ಪ್ರಯಾಣಿಕ ರಸ್ತೆಗೆ ಹಾರಿ ಬಿದ್ದಿದ್ದು, ಗಂಭೀರ ಗಾಯಗೊಂಡು ಆಸ್ಪತ್ರೆಯಲ್ಲಿ ಮೃತಪಟ್ಟಿದ್ದಾನೆ. ದಕ್ಷಿಣಕನ್ನಡ ಜಿಲ್ಲೆಯ ಬಂಟ್ವಾಳ ತಾಲೂಕಿನ ಪಾಣೆಮಂಗಳೂರು ಎಂಬಲ್ಲಿ ಘಟನೆ ನಡೆದಿದೆ. ಮಹಮ್ಮದ್ ಅಲ್ತಾಫ್ (19) ಮೃತ ದುರ್ದೈವಿ.

ಮಹಮ್ಮದ್‌ ಆಟೋದಲ್ಲಿ ಸಜಿಪ ಕಡೆಯಿಂದ ಬಿಸಿರೋಡ್ ಕಡೆ ತೆರಳುತ್ತಿದ್ದರು. ಬಿಸಿರೋಡ್ ನಿಂದ ಪಾಣೆಮಂಗಳೂರು ಕಡೆಯಿಂದ ಬೈಕ್‌ ಬರುವಾಗ ಮುಖಾಮುಖಿ ಡಿಕ್ಕಿಯಾಗಿದೆ. ಅಪಘಾತ ಸಂದರ್ಭದಲ್ಲಿ ಆಟೋ ನಿಯಂತ್ರಣ ತಪ್ಪಿ ಪಲ್ಟಿಯಾಗಿದೆ. ಅಪಘಾತದ ದೃಶ್ಯ ಸಿ.ಸಿ ಕ್ಯಾಮೆರಾದಲ್ಲಿ ಸೆರೆಯಾಗಿದೆ. ಘಟನೆಯಲ್ಲಿ ಬೈಕ್ ಸವಾರರಿಗೂ ಸಣ್ಣಪುಟ್ಟ ಗಾಯವಾಗಿದೆ. ಬಂಟ್ವಾಳ ಸಂಚಾರ ಪೊಲೀಸ್ ಠಾಣೆಯಲ್ಲಿ ಈ ಸಂಬಂಧ ಪ್ರಕರಣ ದಾಖಲಾಗಿದೆ.

ಈ ಸಂಗತಿಯ ಕುರಿತು ನಿಮ್ಮ ಅನಿಸಿಕೆ ಏನು? ಕಾಮೆಂಟ್ ಮೂಲಕ ತಿಳಿಸಿ

Continue Reading

ರಾಜಕೀಯ

‌DK Shivakumar: ಬೂತ್ ಲೀಡ್ ಕೊಡಿಸದಿದ್ದರೆ ನಾಯಕತ್ವ ಇಲ್ಲ; ಜಾಗ ಖಾಲಿ ಮಾಡಿ: ಮುಖಂಡರಿಗೆ ಡಿಕೆಶಿ ವಾರ್ನಿಂಗ್

‌DK Shivakumar: ನಾಲ್ಕು ವೋಟ್ ಹಾಕಿಸದೇ ಬಂದು ಇಲ್ಲಿ ಸ್ಥಾನಮಾನ ಕೇಳಿದರೆ ಹೇಗೆ? ಬಿಳಿ‌ ಜುಬ್ಬಾ, ಬಿಳಿ‌ ಕಾರು ತೆಗೆದುಕೊಂಡು ಬಂದು ಸ್ಥಾನಗಳನ್ನು ಕೇಳುವುದಲ್ಲ. ಮೊದಲು ಸಂಘಟನೆ ‌ಮಾಡಿ, ಇಲ್ಲದಿದ್ದರೆ ಜಾಗ ಖಾಲಿ ಮಾಡಿ. ನಾವು ಹೊಸ ‌ನಾಯಕತ್ವವನ್ನು ಬೆಳೆಸುತ್ತೇವೆ ಎಂದು ಡಿ.ಕೆ. ಶಿವಕುಮಾರ್‌ ಖಡಕ್‌ ಆಗಿ ಹೇಳಿದ್ದಾರೆ. ರಾಜ್ಯದಲ್ಲಿ ಕಾಂಗ್ರೆಸ್ ಸರ್ಕಾರಕ್ಕೆ ಒಂದು ವರ್ಷದ ಪೂರೈಕೆ ಹಿನ್ನೆಲೆಯಲ್ಲಿ ಕೆಪಿಸಿಸಿ ಘಟಕದಿಂದ ಏರ್ಪಡಿಸಲಾಗಿದ್ದ ಸನ್ಮಾನ ಕಾರ್ಯಕ್ರಮದಲ್ಲಿ ಮಾತನಾಡಿದ ಅವರು ಪಕ್ಷದ ಪರವಾಗಿ ಕೆಲಸ ಮಾಡಿ ಎಂಬ ಸಂದೇಶವನ್ನು ರವಾನೆ ಮಾಡಿದ್ದಾರೆ.

VISTARANEWS.COM


on

DK Shivakumar statement in KPCC. no leadership if the booth lead is not given DK Shivakumar warns leaders
Koo

ಬೆಂಗಳೂರು: ನಾನು ಒಂದು ವರ್ಷ ಪೂರೈಸಿದ್ದು ಮುಖ್ಯವಲ್ಲ. ನಾಲ್ಕು ವರ್ಷಗಳಲ್ಲಿ ನನ್ನ ನಾಯಕತ್ವದಲ್ಲಿ ಪಕ್ಷ ಅಧಿಕಾರಕ್ಕೆ ಬಂದಿದೆ, ಅದು ಮುಖ್ಯ. ನಾಲ್ಕು ವೋಟ್ ಹಾಕಿಸದೇ ಬಂದು ಇಲ್ಲಿ ಸ್ಥಾನಮಾನ ಕೇಳುತ್ತೀರಾ? ಮೊದಲು ನಿಮ್ಮ ಬೂತ್‌ನಲ್ಲಿ ಸಂಘಟನೆ ಮಾಡಿ. ಬೂತ್ ಲೀಡ್ ಕೊಡಿಸಿ ಬಂದು ನಾಯಕತ್ವ ಕೇಳಿ. ಇಲ್ಲದೆ ಹೋದರೆ ನಾಯಕತ್ವ ಕೊಡಲ್ಲ ಎಂದು ಡಿಸಿಎಂ, ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್‌ (DK Shivakumar) ಅವರು ಪಕ್ಷದ ಮುಖಂಡರಿಗೆ, ಕಾರ್ಯಕರ್ತರಿಗೆ ಖಡಕ್‌ ವಾರ್ನಿಂಗ್‌ ನೀಡಿದ್ದಾರೆ.

ರಾಜ್ಯದಲ್ಲಿ ಕಾಂಗ್ರೆಸ್ ಸರ್ಕಾರಕ್ಕೆ ಒಂದು ವರ್ಷದ ಪೂರೈಕೆ ಹಿನ್ನೆಲೆಯಲ್ಲಿ ಕೆಪಿಸಿಸಿ ಘಟಕದಿಂದ ಏರ್ಪಡಿಸಲಾಗಿದ್ದ ಸನ್ಮಾನ ಕಾರ್ಯಕ್ರಮದಲ್ಲಿ ಮಾತನಾಡಿದ ಡಿ.ಕೆ. ಶಿವಕುಮಾರ್‌, ನಾಲ್ಕು ವೋಟ್ ಹಾಕಿಸದೇ ಬಂದು ಇಲ್ಲಿ ಸ್ಥಾನಮಾನ ಕೇಳಿದರೆ ಹೇಗೆ? ಬಿಳಿ‌ ಜುಬ್ಬಾ, ಬಿಳಿ‌ ಕಾರು ತೆಗೆದುಕೊಂಡು ಬಂದು ಸ್ಥಾನಗಳನ್ನು ಕೇಳುವುದಲ್ಲ. ಮೊದಲು ಸಂಘಟನೆ ‌ಮಾಡಿ, ಇಲ್ಲದಿದ್ದರೆ ಜಾಗ ಖಾಲಿ ಮಾಡಿ. ನಾವು ಹೊಸ ‌ನಾಯಕತ್ವವನ್ನು ಬೆಳೆಸುತ್ತೇವೆ ಎಂದು ಹೇಳಿದರು.

ನಾನು ಸದ್ಯ ಕೆಪಿಸಿಸಿ ಅಧ್ಯಕ್ಷನಾಗಿದ್ದೇನೆ. ಇನ್ನೂ ಎಷ್ಟು ದಿನ ಈ ಸ್ಥಾನದಲ್ಲಿ ಇರುತ್ತೇನೋ, ಇಲ್ಲವೋ ಅನ್ನುವುದು ಗೊತ್ತಿಲ್ಲ. ನಮ್ಮ ಪಕ್ಷದ ನಾಯಕತ್ವ ಬುನಾದಿ ಗಟ್ಟಿ ಮಾಡಬೇಕು. ಬೂತ್ ಮಟ್ಟದಲ್ಲಿ ಗಟ್ಟಿ ಮಾಡಬೇಕು ಎಂದು ಕಿವಿಮಾತು ಹೇಳಿದರು.

ರಾಜೀವ್‌ ಗಾಂಧಿ ಪ್ರತಿಮೆ ಬದಲಿಸಿದ್ದೇನೆ

ರಾಜೀವ್ ಗಾಂಧಿಯವರ ಪ್ರಾಣ ಎಲ್ಲಿ ಹೋಯಿತೋ ಅಲ್ಲಿ ಕನಕಪುರದ ಕಲ್ಲು ಹಾಕಿದ್ದೇನೆ. ಸೋನಿಯಾ ಗಾಂಧಿ ಸೂಚನೆ ಮೇರೆಗೆ ಹಾಕಿದ್ದೇನೆ. ನನಗೆ ಕನಕಪುರ ಬಂಡೆ ಅಂತಾರಲ್ಲ. ನಮ್ಮೂರ ಬಂಡೆಯ ಕಲ್ಲು ಅಲ್ಲಿ ತೆಗೆದುಕೊಂಡು ಹೋಗಿ ಹಾಕಿದ್ದೇನೆ. ಅಲ್ಲಿ ಹೋದಾಗ ನೋಡಿ. ಬೆಂಗಳೂರಿನಲ್ಲಿ ರಾಜೀವ್ ಗಾಂಧಿ ಪ್ರತಿಮೆಯನ್ನು ಬದಲಾವಣೆ ಮಾಡಿದ್ದೇವೆ. ನಾನು ಬೆಂಗಳೂರು ಉಸ್ತುವಾರಿ ಸಚಿವನಾದ ಮೇಲೆ ಮೊದಲು ಅನುದಾನ ಬಿಡುಗಡೆ ‌ಮಾಡಿದ್ದು, ಸಹ ಇದಕ್ಕೇ ಆಗಿದೆ. ಅದರಂತೆ ರಾಜೀವ್ ಗಾಂಧಿ ಪ್ರತಿಮೆ ಬದಲಾವಣೆ ಮಾಡಿದ್ದು, ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಉದ್ಘಾಟನೆ ಮಾಡಿದರು ಎಂದು ಡಿ.ಕೆ. ಶಿವಕುಮಾರ್ ಹೇಳಿದರು.

Prashant Kishor: ಈ ಬಾರಿ ಮೋದಿಗೆ ಹಿನ್ನಡೆ ಆಗುತ್ತಾ? ಪ್ರಶಾಂತ್ ಕಿಶೋರ್ ಲೇಟೆಸ್ಟ್ ಲೆಕ್ಕಾಚಾರ ಹೀಗಿದೆ

ನವದೆಹಲಿ: ಲೋಕಸಭಾ ಚುನಾವಣೆ (Lok Sabha Election)ಯ ಮೊದಲ 5 ಹಂತಗಳ ಮತದಾನ ಮುಗಿದಿದೆ. ಇನ್ನು ಎರಡು ಹಂತಗಳ ಮತದಾನ ಬಾಕಿ ಇದ್ದು, ಸೋಲು-ಗೆಲುವಿನ ಲೆಕ್ಕಾಚಾರ ಆರಂಭವಾಗಿದೆ. ಈ ಮಧ್ಯೆ ಚುನಾವಣಾ ತಂತ್ರಜ್ಞ ಪ್ರಶಾಂತ್ ಕಿಶೋರ್ (Prashant Kishor) ಫಲಿತಾಂಶವನ್ನು ಊಹಿಸಿದ್ದು, 2019ರ ಚುನಾವಣೆಗೆ ಹೋಲಿಸಿದರೆ ಈ ಬಾರಿ ಬಿಜೆಪಿ ಹೆಚ್ಚುವರಿ ಸ್ಥಾನಗಳನ್ನು ಗೆಲ್ಲಲಿದೆ ಎಂದು ಹೇಳಿದ್ದಾರೆ.

ಸಂದರ್ಶನವೊಂದರಲ್ಲಿ ಮಾತನಾಡಿದ ಅವರು, ಬಿಜೆಪಿ ಸ್ಪಷ್ಟ ಬಹುಮತ ಹೊಂದಲಿದೆ ಎಂದು ವಿಶ್ವಾಸ ವ್ಯಕ್ತಪಡಿಸಿದ್ದಾರೆ. ʼʼಈ ಚುನಾವಣೆಯಲ್ಲಿ ಬಿಜೆಪಿ ಅತ್ಯುತ್ತಮ ಪ್ರದರ್ಶನ ತೋರಲಿದೆ. ಜತೆಗೆ ಸೀಟುಗಳ ಸಂಖ್ಯೆಯನ್ನೂ ವೃದ್ಧಿಸಿಕೊಳ್ಳಲಿದೆ. ಅದರಲ್ಲಿಯೂ ದೇಶದ ಉತ್ತರ ಮತ್ತು ಪಶ್ಚಿಮ ಭಾಗಗಳಲ್ಲಿ ಬಿಜೆಪಿ ಇನ್ನಷ್ಟು ಶಕ್ತವಾಗಲಿದೆ. ಅಲ್ಲದೆ ಪೂರ್ವ ಮತ್ತು ದಕ್ಷಿಣ ಭಾಗಗಳಲ್ಲಿಯೂ ಸೀಟು ಹೆಚ್ಚಳವಾಗುವ ನಿರೀಕ್ಷೆ ಇದೆʼʼ ಎಂದು ಅಭಿಪ್ರಾಯಪಟ್ಟಿದ್ದಾರೆ.

ವಿಶ್ಲೇಷಕರ ಅಭಿಪ್ರಾಯದ ಮಧ್ಯೆ ಕಿಶೋರ್‌ ಮಾತು

ಬಿಜೆಪಿ ಬಹುಮತ ಪಡೆಯುವ ಸಾಧ್ಯತೆಯಿಲ್ಲ ಮತ್ತು ಮೊದಲ ಕೆಲವು ಹಂತಗಳ ಮತದಾನ ಆಡಳಿತ ಪಕ್ಷದ ಪರವಾಗಿಲ್ಲ ಎಂದು ರಾಜಕೀಯ ವಿಶ್ಲೇಷಕರು ಅಭಿಪ್ರಾಯ ಪಟ್ಟಿದ್ದು, ಕೆಲವು ವರದಿಗಳು ಇದನ್ನೇ ಊಹಿಸಿರುವ ಮಧ್ಯೆ ಪ್ರಶಾಂತ್‌ ಕಿಶೋರ್‌ ಈ ರೀತಿ ಹೇಳಿಕೆ ನೀಡಿರುವುದು ಕಮಲ ಪಾಳಯಕ್ಕೆ ಕೊಂಚ ಮಟ್ಟಿನ ಸಮಾಧಾನ ತಂದಿತ್ತಿದೆ. ಆದಾಗ್ಯೂ ಅವರು ರಾಜ್ಯವಾರು ಫಲಿತಾಂಶಗಳನ್ನು ಊಹಿಸಲು ನಿರಾಕರಿಸಿದ್ದಾರೆ.

ಮೋದಿ ಬ್ರ್ಯಾಂಡ್‌ ಕುಸಿತ

ಬಿಜೆಪಿಯ ಬಗ್ಗೆ ಈಗಲೂ ಜನರಲ್ಲಿ ಸಕಾರಾತ್ಮಕ ಭಾವನೆ ಇದೆ ಎಂದಿರುವ ಪ್ರಶಾಂತ್‌ ಕಿಶೋರ್‌, ಮೋದಿ ಬ್ರ್ಯಾಂಡ್‌ ಮಾತ್ರ ಕುಸಿಯುತ್ತಿದೆ. ಪ್ರಧಾನಿಯ ಪ್ರಭಾವ ಕ್ಷೀಣಿಸುತ್ತಿದೆ ಎಂದು ಹೇಳಿದ್ದಾರೆ. ಇತ್ತ ವಿರೋಧ ಪಕ್ಷಗಳ ಕಾರ್ಯ ವೈಖರಿಯನ್ನೂ ಅವರು ಟೀಕಿಸಿದ್ದಾರೆ. ಬಿಜೆಪಿ ವಿರುದ್ಧ ಪ್ರಯೋಗಿಸಬಹುದಾದ ಅನೇಕ ಅಸ್ತ್ರಗಳನ್ನು, ಅವಕಾಶಗಳನ್ನು ʼಇಂಡಿಯಾʼ ಮೈತ್ರಿಕೂಟ ಸಮರ್ಪಕವಾಗಿ ಬಳಸಿಕೊಳ್ಳುತ್ತಿಲ್ಲ ಎಂದು ಹೇಳಿದ್ದಾರೆ. ಕಾಂಗ್ರೆಸ್‌ ರಾಜ್ಯ ವಿಧಾನಸಭಾ ಚುನಾವಣೆಗಳ ಮೇಲೆ ಗಮನ ಕೇಂದ್ರೀಕರಿಸಿದ ಹಿನ್ನೆಲೆಯಲ್ಲಿ ಸೆಪ್ಟೆಂಬರ್ ಮತ್ತು ಡಿಸೆಂಬರ್ ನಡುವಿನ ನಿರ್ಣಾಯಕ ತಿಂಗಳುಗಳು ವ್ಯರ್ಥವಾಗಿದೆ. ಇದು ʼಇಂಡಿಯಾʼ ಬಣದ ಮೇಲೆ ನಕಾರಾತ್ಮಕ ಪರಿಣಾಮ ಬೀರಿದೆ ಎಂದು ಅವರು ಒತ್ತಿ ಹೇಳಿದ್ದಾರೆ. ಡಿಸೆಂಬರ್‌ನಲ್ಲಿ ಮೂರು ರಾಜ್ಯಗಳಲ್ಲಿನ ಬಿಜೆಪಿಯ ಗೆಲುವು ಮತ್ತು ಜನವರಿಯಲ್ಲಿ ನಡೆದ ಅಯೋಧ್ಯೆ ರಾಮ ಮಂದಿರದ ಉದ್ಘಾಟನೆ ಕಮಲ ಪಡೆಯ ಗೆಲುವಿಗೆ ಇನ್ನಷ್ಟು ಶಕ್ತಿ ನೀಡಲಿದೆ ಎಂದಿದ್ದಾರೆ.

ಇದನ್ನೂ ಓದಿ: Lok Sabha Election 2024: ಪ್ರತಿಪಕ್ಷಗಳಿಗೆ ರೆಡ್‌ ಅಲರ್ಟ್‌ ನೀಡಿದ ಪ್ರಶಾಂತ್‌ ಕಿಶೋರ್‌; ಏನವರ ಚುನಾವಣಾ ಲೆಕ್ಕಾಚಾರ?

ರಾಹುಲ್‌ ಗಾಂಧಿಗೆ ಸಲಹೆ

ಕಾಂಗ್ರೆಸ್‌ ನಾಯಕ ರಾಹುಲ್ ಗಾಂಧಿ ಅವರಿಗೆ ಸಲಹೆ ನೀಡಿದ ಪ್ರಶಾಂತ್‌ ಕಿಶೋರ್, ಚುನಾವಣಾ ಫಲಿತಾಂಶಗಳು ಕಾಂಗ್ರೆಸ್ ಪರವಾಗಿಲ್ಲದಿದ್ದರೆ ಐದು ವರ್ಷಗಳ ವಿರಾಮ ತೆಗೆದುಕೊಳ್ಳುವಂತೆ ಸೂಚಿಸಿದ್ದಾರೆ. ಮೂರನೇ ಅವಧಿಯಲ್ಲಿ ಬಿಜೆಪಿಗೆ ಅನೇಕ ಕಠಿಣ ಸವಾಲು ಎದುರಾಗಲಿದೆ ಎಂದು ಅವರು ಎಚ್ಚರಿಸಿದ್ದಾರೆ. ಭೂ ಮಸೂದೆ ವಿರೋಧಿ ಪ್ರತಿಭಟನೆ, ಪೌರತ್ವ ತಿದ್ದುಪಡಿ ಕಾಯ್ದೆ (ಸಿಎಎ)ಯ ವಿರೋಧಿಸಿ ನಡೆದ ಪ್ರತಿಭಟನೆ ಮತ್ತು ರೈತರ ಹೋರಾಟವನ್ನು ಉಲ್ಲೇಖಿಸಿ ಅವರು ಸವಾಲುಗಳ ಬಗ್ಗೆ ಎಚ್ಚರಿಕೆ ನೀಡಿದ್ದಾರೆ. ಈ ಎಲ್ಲ ಸವಾಲುಗಳಿಂದ ಮೋದಿ ದುರ್ಬಲ ಪ್ರಧಾನಿ ಎನಿಸಿಕೊಳ್ಳಲಿದ್ದಾರೆ ಎಂದೂ ಅಭಿಪ್ರಾಯಪಟ್ಟಿದ್ದಾರೆ.

Continue Reading
Advertisement
2nd Puc Result
ಬೆಂಗಳೂರು5 mins ago

2nd PUC Result : ದ್ವಿತೀಯ ಪಿಯುಸಿ ಪರೀಕ್ಷೆ-2ರ ಫಲಿತಾಂಶ ಪ್ರಕಟ; ಬಾಲಕಿಯರದೇ ಮೇಲುಗೈ

L2 Empuraan first look poster shared by Prithviraj Sukumaran
South Cinema15 mins ago

 L2 Empuraan: ಮೋಹನ್‌ಲಾಲ್ ಬರ್ತ್‌ಡೇ; L2E-ಎಂಪುರಾನ್‌ ಲುಕ್‌ ಔಟ್‌!

Shane Watson Apologize
ಕ್ರಿಕೆಟ್32 mins ago

Shane Watson Apologize: ಪ್ರೆಸಿಡೆನ್ಸಿ ಕಾಲೇಜಿನಲ್ಲಿ ಪುಸ್ತಕ ಬಿಡುಗಡೆಗೊಳಿಸಿ ಆರ್​ಸಿಬಿ ಅಭಿಮಾನಿಗಳಲ್ಲಿ ಕ್ಷಮೆ ಕೇಳಿದ ಶೇನ್​ ವಾಟ್ಸನ್

Viral Video
ವೈರಲ್ ನ್ಯೂಸ್33 mins ago

Viral Video: ಇಂಗ್ಲೀಷ್‌ನಲ್ಲೂ ಮಾತಾಡುತ್ತೆ…ಮಿಮಿಕ್ರಿನೂ ಮಾಡುತ್ತೆ ಈ ಗಿಣಿ; ವಿಡಿಯೋ ನೋಡಿದ್ರೆ ಫಿದಾ ಆಗೋದು ಗ್ಯಾರಂಟಿ!

DK Shivakumar speaks about KPCC president post
ಬೆಂಗಳೂರು36 mins ago

‌DK Shivakumar: ಕೆಪಿಸಿಸಿ ಅಧ್ಯಕ್ಷನಾಗಿ ಎಷ್ಟು ದಿನ ಇರುತ್ತೇನೋ ಗೊತ್ತಿಲ್ಲ; ಡಿಕೆಶಿ ಹೀಗೆ ಹೇಳಿದ್ಯಾಕೆ?

Chitta Ranjan Dash
ದೇಶ1 hour ago

Chitta Ranjan Dash: ಆರ್‌ಎಸ್‌ಎಸ್‌ನ ಸ್ವಯಂಸೇವಕನಾಗಿದ್ದೆ; ಈಗಲೂ ಮರಳಲು ಸಿದ್ಧ ಎಂದ ಹೈಕೋರ್ಟ್‌ ನಿವೃತ್ತ ಜಡ್ಜ್‌ ಚಿತ್ತರಂಜನ್‌ ದಾಸ್‌

Road Accident
ಕ್ರೈಂ1 hour ago

Road Accident : ತಾಯಿ-ಮಗನ ಬಲಿ ಪಡೆದ ಕಂಟೇನರ್‌; ಆಟೋ ಪ್ರಯಾಣಿಕ ಸೇರಿ ಸವಾರರಿಬ್ಬರ ಪ್ರಾಣ ಕಸಿದ ಬೈಕ್‌

DK Shivakumar statement in KPCC. no leadership if the booth lead is not given DK Shivakumar warns leaders
ರಾಜಕೀಯ1 hour ago

‌DK Shivakumar: ಬೂತ್ ಲೀಡ್ ಕೊಡಿಸದಿದ್ದರೆ ನಾಯಕತ್ವ ಇಲ್ಲ; ಜಾಗ ಖಾಲಿ ಮಾಡಿ: ಮುಖಂಡರಿಗೆ ಡಿಕೆಶಿ ವಾರ್ನಿಂಗ್

Mysuru News actress Vidhya Nandish congress leader killed by her husband
ಕ್ರೈಂ2 hours ago

Actress Murder: ‘ಭಜರಂಗಿ’ ಸಿನಿಮಾ ನಟಿ ಗಂಡನಿಂದಲೇ ಭೀಕರ ಕೊಲೆ!

Anant Ambani Radhika 2nd pre wedding bash
ಬಾಲಿವುಡ್2 hours ago

Anant Ambani Radhika: ಐಷಾರಾಮಿ ಹಡಗಿನಲ್ಲಿ ನಡೆಯಲಿದೆ ಅಂಬಾನಿ ಮಗನ ಮತ್ತೊಂದು ಪ್ರಿ ವೆಡ್ಡಿಂಗ್‌ ಶೋ!

Sharmitha Gowda in bikini
ಕಿರುತೆರೆ8 months ago

Geetha Serial Kannada: ನಿದ್ದೆ ಕದ್ದ ಚೋರಿ! ನಟಿ `ಭಾನುಮತಿ’ ಹಾಟ್‌ ಪೋಟೊಗಳಿಗೆ ಫ್ಯಾನ್ಸ್ ಫುಲ್ ಫಿದಾ

Kannada Serials
ಕಿರುತೆರೆ7 months ago

Kannada Serials TRP: 2ನೇ ಸ್ಥಾನದಲ್ಲಿ 2 ಧಾರಾವಾಹಿಗಳು; ಟಿಆರ್‌ಪಿ ರೇಸ್‌ನಲ್ಲಿಲ್ಲ ಭಾಗ್ಯಲಕ್ಷ್ಮೀ!

Bigg Boss- Saregamapa 20 average TRP
ಕಿರುತೆರೆ7 months ago

Kannada Serials TRP: ಏಳನೇ ಸ್ಥಾನಕ್ಕೆ ʻಅಮೃತಧಾರೆʼ ಕುಸಿತ; ಬಿಗ್‌ ಬಾಸ್‌-ಸರಿಗಮಪ ಟಿಆರ್‌ಪಿ ಎಷ್ಟು?

galipata neetu
ಕಿರುತೆರೆ6 months ago

Kanyadana Serial: ಕಿರುತೆರೆಗೆ ಮತ್ತೆ ಎಂಟ್ರಿ ಕೊಟ್ಟ ʻಗಾಳಿಪಟʼ ಖ್ಯಾತಿಯ ʻನೀತುʼ!

Kannada Serials
ಕಿರುತೆರೆ8 months ago

Kannada Serials TRP: ನಾಲ್ಕನೇ ಸ್ಥಾನಕ್ಕೆ ಕುಸಿತ ಕಂಡ ʻಸೀತಾ ರಾಮʼ; ಟಿಆರ್‌ಪಿ ರೇಸ್‌ಗೆ ʻಭಾಗ್ಯಲಕ್ಷ್ಮಿʼ ಬ್ಯಾಕ್‌!

Kannada Serials
ಕಿರುತೆರೆ8 months ago

Kannada Serials TRP: ಟಿಆರ್‌ಪಿಯಲ್ಲಿ ʻಭಾಗ್ಯಲಕ್ಷ್ಮೀʼ ಹವಾ; ʻಪುಟ್ಟಕ್ಕನ ಮಕ್ಕಳುʼ ಧಾರಾವಾಹಿಗೆ ಸಂಕಷ್ಟ!

Bigg Boss' dominates TRP; Sita Rama fell to the sixth position
ಕಿರುತೆರೆ7 months ago

Kannada Serials TRP: ಟಿಆರ್‌ಪಿಯಲ್ಲಿ ʻಬಿಗ್ ಬಾಸ್ʼದೇ ಮೇಲುಗೈ; 6ನೇ ಸ್ಥಾನಕ್ಕೆ ಕುಸಿದ ʻಸೀತಾ ರಾಮʼ

geetha serial Dhanush gowda engagement
ಕಿರುತೆರೆ5 months ago

Dhanush Gowda: ಗೀತಾ ಧಾರಾವಾಹಿ ನಟನ ನಿಶ್ಚಿತಾರ್ಥ; ಭವ್ಯಾಳ ಕಮೆಂಟ್‌ ಬಾಕ್ಸ್‌ ಆಫ್‌!

varun
ಕಿರುತೆರೆ6 months ago

Brindavana Serial: ʼಬೃಂದಾವನʼ ಧಾರಾವಾಹಿಯಲ್ಲಿ ದೊಡ್ಡ ಟ್ವಿಸ್ಟ್‌; ಪ್ರಮುಖ ಪಾತ್ರಧಾರಿಯೇ ಬದಲು

Kannada Serials
ಕಿರುತೆರೆ8 months ago

Kannada Serials TRP: ಟಿಆರ್‌ಪಿಯಲ್ಲಿ ಏರಿಕೆ ಕಂಡ ʻಅಮೃತಧಾರೆʼ; ʻಗಟ್ಟಿಮೇಳʼಕ್ಕೆ ನಾಲ್ಕನೇ ಸ್ಥಾನ!

Karnataka Rain
ಮಳೆ1 day ago

Karnataka Rain : ಬಂಗಾಳ ಕೊಲ್ಲಿಯಲ್ಲಿ ವಾಯುಭಾರ ಕುಸಿತ; ಸಮುದ್ರಕ್ಕಿಳಿಯದಂತೆ ಮೀನುಗಾರರಿಗೆ ಎಚ್ಚರಿಕೆ

Karnataka Rain
ಮಳೆ2 days ago

Karnataka Rain : ಒಂದೇ ಮಳೆಗೆ ಹೊಳೆಯಂತಾದ ಬೆಂಗಳೂರು ರಸ್ತೆಗಳು! ಕಳಸದಲ್ಲೂ ಮುಂದುವರಿದ ಅಬ್ಬರ

Karnataka rain
ಮಳೆ2 days ago

Karnataka Rain : ವಿಜಯನಗರದಲ್ಲಿ ಸಿಡಿಲಿಗೆ ಜಾನುವಾರು ಬಲಿ; ಬೆಂಗಳೂರು ಸೇರಿ ಹಲವೆಡೆ ಭಾರಿ ಮಳೆ

Karnataka Rain
ಮಳೆ2 days ago

Karnataka Rain: ಧಾರಾಕಾರ ಮಳೆಗೆ ಕಾಂಪೌಂಡ್ ಕುಸಿದು 4 ಬೈಕ್‌ಗಳು ಜಖಂ; ಮದುವೆ ಮಂಟಪಕ್ಕೆ ನುಗ್ಗಿದ ನೀರು‌

Prajwal Revanna Case JDS calls CD Shivakumar pen drive gang
ರಾಜಕೀಯ4 days ago

Prajwal Revanna Case: CD ಶಿವಕುಮಾರ್ ಪೆನ್ ಡ್ರೈವ್ ಗ್ಯಾಂಗ್ ಎಂದ ಕುಟುಕಿದ ಜೆಡಿಎಸ್‌!

Karnataka weather Forecast
ಮಳೆ4 days ago

Karnataka Weather : ಮೈಸೂರು, ಮಂಡ್ಯ ಸೇರಿ ಈ 7 ಜಿಲ್ಲೆಗಳಲ್ಲಿ ವ್ಯಾಪಕ ಮಳೆ ಸಂಭವ

Dina Bhavishya
ಭವಿಷ್ಯ4 days ago

Dina Bhavishya : ಈ ರಾಶಿಯ ಪ್ರೇಮಿಗಳಿಗೆ ಮನೆಯಿಂದ ಸಿಗುತ್ತೆ ಗ್ರೀನ್‌ ಸಿಗ್ನಲ್‌

Karnataka Weather Forecast
ಮಳೆ5 days ago

Karnataka Weather : ಭಾರಿ ಮಳೆಗೆ ಕೊಟ್ಟೂರು ಬಸ್ ಸ್ಟ್ಯಾಂಡ್‌ ಜಲಾವೃತ; ‌ ತಾಯಿ-ಮಗ ಗ್ರೇಟ್‌ ಎಸ್ಕೇಪ್‌

Drowned in water
ಹಾಸನ5 days ago

Drowned in water : ಕೆರೆಯಲ್ಲಿ ಈಜಲು ಹೋದ ನಾಲ್ವರು ನೀರುಪಾಲು; ಓರ್ವ ಬಾಲಕ ಪಾರು

Suspicious Case
ಬೆಂಗಳೂರು5 days ago

Suspicious Case : ಬಾತ್‌ ರೂಂನಲ್ಲಿತ್ತು ಕಾಲೇಜು ಹುಡುಗಿ ಡೆಡ್‌ ಬಾಡಿ; ಕುತ್ತಿಗೆ ಕೊಯ್ದು ಸಾಯಿಸಿದವರು ಯಾರು?

ಟ್ರೆಂಡಿಂಗ್‌