Mahesh Babu: ಮಹೇಶ್‌ ಬಾಬು ವರ್ಕೌಟ್‌ ವಿಡಿಯೊ ವೈರಲ್‌; ʻಭಾರತದ ಜಾನ್‌ ವಿಕ್‌ʼ ಅಂದ್ರು ಫ್ಯಾನ್ಸ್‌! - Vistara News

South Cinema

Mahesh Babu: ಮಹೇಶ್‌ ಬಾಬು ವರ್ಕೌಟ್‌ ವಿಡಿಯೊ ವೈರಲ್‌; ʻಭಾರತದ ಜಾನ್‌ ವಿಕ್‌ʼ ಅಂದ್ರು ಫ್ಯಾನ್ಸ್‌!

Mahesh Babu: ಮಹೇಶ್‌ ಬಾಬು ಜಿಮ್‌ನಲ್ಲಿ ವರ್ಕೌಟ್‌ ಮಾಡುತ್ತಿರುವ ವಿಡಿಯೊ ನೋಡಿದ ನೆಟ್ಟಿಗರು, ನಟನಿಗೆ 48 ವರ್ಷ ವಯಸ್ಸಾಗಿದೆ ಎಂದು ನಂಬಲು ಅಸಾಧ್ಯ ಎಂದು ಕಮೆಂಟ್‌ ಮಾಡುತ್ತಿದ್ದಾರೆ.

VISTARANEWS.COM


on

Mahesh Babu workout
ಮಹತ್ವದ, ಕುತೂಹಲಕರ ಸುದ್ದಿಗಾಗಿ ಫಾಲೊ ಮಾಡಿ
Koo

ಬೆಂಗಳೂರು: ಈಗಾಗಲೇ ನಟ ಮಹೇಶ್‌ ಬಾಬು (Mahesh Babu) ʻಗುಂಟೂರು ಖಾರಂʼ ಸಿನಿಮಾದ ಹೊಸ ರಗಡ್‌ಲುಕ್‌ನಿಂದಾಗಿ ಭಾರಿ ಸುದ್ದಿಯಲ್ಲಿದ್ದಾರೆ. ಹೀಗಿರುವಾಗ ಇದೀಗ ನಟನ ವರ್ಕೌಟ್‌ ವಿಡಿಯೊ ಸಖತ್‌ ವೈರಲ್‌ ಆಗುತ್ತಿದೆ. ಮಹೇಶ್‌ ಬಾಬು ಜಿಮ್‌ನಲ್ಲಿ ವರ್ಕೌಟ್‌ ಮಾಡುತ್ತಿರುವ ವಿಡಿಯೊ ನೋಡಿದ ನೆಟ್ಟಿಗರು, ನಟನಿಗೆ 48 ವರ್ಷ ವಯಸ್ಸಾಗಿದೆ ಎಂದು ನಂಬಲು ಅಸಾಧ್ಯ ಎಂದು ಕಮೆಂಟ್‌ ಮಾಡುತ್ತಿದ್ದಾರೆ. ಜಿಮ್‌ನಲ್ಲಿ ವರ್ಕೌಟ್‌ ಮಾಡುತ್ತಿರುವ ವಿಡಿಯೊ ಜುಲೈ 1ರಂದು ಮಹೇಶ್‌ ಬಾಬು ಸೋಷಿಯಲ್‌ ಮೀಡಿಯಾದಲ್ಲಿ ಹಂಚಿಕೊಂಡಿದ್ದಾರೆ.

“ನನ್ನ ಶನಿವಾರದ ಸಿಜಲ್ ಸೆಟ್!! ನನ್ನ ನೆಚ್ಚಿನ ಸ್ಕಿಲ್‌ಮಿಲ್ ಫಿನಿಶರ್ ಜತೆಗೆ… 1 ನಿಮಿಷ ಲ್ಯಾಂಡ್‌ಮೈನ್ ಪ್ರೆಸ್, 1 ನಿಮಿಷ ಕೆಟಲ್‌ಬೆಲ್ ಸ್ವಿಂಗ್, 1 ನಿಮಿಷ ಸ್ಕಿಲ್‌ಮಿಲ್ ರನ್‌. ನೀವು ಎಷ್ಟು ಸೆಟ್ ಮಾಡಬಹುದು?’ ಎಂದು ತಮ್ಮ ಫ್ಯಾನ್ಸ್‌ಗೆ ಪ್ರಶ್ನೆ ಕೇಳಿದ್ದಾರೆ. ಜತೆಗೆ ವಿಡಿಯೊಗೆ ನಟ ತಮ್ಮ ಜಿಮ್ ತರಬೇತುದಾರರಾದ ಮಿನಾಶ್ ಗೇಬ್ರಿಯಲ್ ಮತ್ತು ಹೀತ್ ಮ್ಯಾಡ್ಯೂಸ್ ಅವರನ್ನು ಟ್ಯಾಗ್ ಮಾಡಿದ್ದಾರೆ. ಮಹೇಶ್ ಪೋಸ್ಟ್ ಹಂಚಿಕೊಂಡ ಕೂಡಲೇ ಅವರ ಅಭಿಮಾನಿಗಳು ನಟನನ್ನು ಕಮೆಂಟ್ ವಿಭಾಗದಲ್ಲಿ ಹೊಗಳಿದ್ದಾರೆ. ಮಹೇಶ್‌ ಅವರ ದೇಹ ದಂಡಿಸುವ ವಿಡಿಯೊಗೆ ಮೆಚ್ಚುಗೆ ವ್ಯಕ್ತಪಡಿಸಿದ್ದಾರೆ. ʻಭಾರತದ ಜಾನ್‌ ವಿಕ್‌ʼ ಎಂದು ಹಲವರು ಕಮೆಂಟ್‌ ಮಾಡಿದ್ದಾರೆ. ಅಷ್ಟೇ ಅಲ್ಲದೇ ಪತ್ನಿ ನಮೃತಾ ಕೂಡ ಫೈರ್‌ ಇಮೋಜಿ ಕಮೆಂಟ್‌ ಮಾಡಿದ್ದಾರೆ.

ಮಹೇಶ್ ಬಾಬು ಸದ್ಯ ತ್ರಿವಿಕ್ರಮ್ ಶ್ರೀನಿವಾಸ್ ನಿರ್ದೇಶನದ ʻಗುಂಟೂರು ಖಾರಂʼ ಚಿತ್ರೀಕರಣದಲ್ಲಿ ತೊಡಗಿಸಿಕೊಂಡಿದ್ದಾರೆ. ವರದಿಗಳ ಪ್ರಕಾರ ಈ ಚಿತ್ರದಲ್ಲಿ ಪೂಜಾ ಹೆಗ್ಡೆ ಬದಲಿಗೆ ಮೀನಾಕ್ಷಿ ಚೌಧರಿ ನಟಿಸಲಿದ್ದಾರೆ ಎಂದು ವರದಿಯಾಗಿದೆ.

ಈ ಸಿನಿಮಾದಲ್ಲಿ ಮಹೇಶ್ ಬಾಬು ಅವರ ತಾಯಿಯ ಪಾತ್ರವನ್ನು ನಿರ್ವಹಿಸಲು ರಮ್ಯಾ ಕೃಷ್ಣನ್ ಅವರನ್ನು ಚಿತ್ರತಂಡ ಆಯ್ಕೆ ಮಾಡಿದೆ ಎಂದು ವರದಿಯಾಗಿದೆ. ಈ ಬದಲಾವಣೆಗಳ ಹೊರತಾಗಿ, ಚಿತ್ರದ ಹಿನ್ನೆಲೆ ಸಂಗೀತವನ್ನು ಇನ್ನು ಮುಂದೆ ಸಂಗೀತ ನಿರ್ದೇಶಕ ಥಮನ್ ನೀಡುವುದಿಲ್ಲ ಎಂದು ವದಂತಿಗಳಿವೆ. ವದಂತಿಗಳನ್ನು ನಂಬುವುದಾದರೆ, ಅನಿರುದ್ಧ್ ಶೀಘ್ರದಲ್ಲೇ ಗುಂಟೂರು ಖಾರಂ ಸೇರುವ ಸಾಧ್ಯತೆಯಿದೆ.

ಇದನ್ನೂ ಓದಿ: Mahesh Babu: ರೇಂಜ್‌ ರೋವರ್‌ ಕಾರು ಖರೀದಿಸಿದ ನಟ ಮಹೇಶ್‌ ಬಾಬು, ರೇಟ್‌ ಕೇಳಿದರೆ ಅಬ್ಬಾ ಅಂತೀರಿ

ಗುಂಟೂರು ಖಾರಂ’ ಸಿನಿಮಾ ಶೂಟಿಂಗ್ ಪದೇಪದೆ ತಡವಾಗುತ್ತಿದೆ. ಚಿತ್ರಕಥೆಯಲ್ಲಿ ಬದಲಾವಣೆ ಮಾಡುತ್ತಿದ್ದು, ಸಂಕ್ರಾಂತಿಗೂ ಸಿನಿಮಾ ರಿಲೀಸ್ ಆಗುವುದಿಲ್ಲ . 2024ರ ಜನವರಿ 13ರಂದು ಚಿತ್ರಮಂದಿರಗಳಲ್ಲಿ ಬಿಡುಗಡೆಯಾಗಲಿದೆ ಎನ್ನಲಾಗಿದೆ. ‘ಹಾರಿಕಾ ಆ್ಯಂಡ್​ ಹಾಸಿನಿ ಕ್ರಿಯೇಷನ್ಸ್​’ ಬ್ಯಾನರ್​ ಮೂಲಕ ಈ ಸಿನಿಮಾ ಅದ್ಧೂರಿಯಾಗಿ ನಿರ್ಮಾಣ ಆಗುತ್ತಿದೆ. ಎಸ್​. ರಾಧಾಕೃಷ್ಣ ಅವರು ಈ ಚಿತ್ರಕ್ಕೆ ಬಂಡವಾಳ ಹೂಡುತ್ತಿದ್ದಾರೆ. ಈ ಹಿಂದೆ ʻಅತಡುʼ ಮತ್ತು ʻಖಲೇಜಾʼದಂತಹ ಬ್ಲಾಕ್‌ಬಸ್ಟರ್ ಚಿತ್ರಗಳಲ್ಲಿ ಮಹೇಶ್ ಬಾಬು ಹಾಗೂ ತ್ರಿವಿಕ್ರಮ್ ಶ್ರೀನಿವಾಸ್ ಒಟ್ಟಿಗೆ ಕೆಲಸ ಮಾಡಿದ್ದರು.

ಕ್ಷಣ ಕ್ಷಣದ ಮಾಹಿತಿಗಾಗಿ Vistara News FaceBook ಪೇಜ್ ಫಾಲೋ ಮಾಡಿ
ಮಹತ್ವದ ಮಾಹಿತಿಗಾಗಿ ವಿಸ್ತಾರ ನ್ಯೂಸ್ ಆ್ಯಪ್ ಉಚಿತವಾಗಿ ಡೌನ್ ಲೋಡ್ ಮಾಡಿಕೊಳ್ಳಿ: Andriod App | IOS App
Continue Reading
Click to comment

Leave a Reply

Your email address will not be published. Required fields are marked *

ಸ್ಯಾಂಡಲ್ ವುಡ್

V Cinemas: ರಮೇಶ್ ಅರವಿಂದ್ – ಡಾಲಿ ಧನಂಜಯರಿಂದ ‘ವಿ ಸಿನಿಮಾಸ್’ ಮಲ್ಟಿಪ್ಲೆಕ್ಸ್ ಉದ್ಘಾಟನೆ

V Cinemas: ಅತಿಥಿಗಳನ್ನು ಸ್ವಾಗತಿಸಿ ಮಾತನಾಡಿದ ವಿತರಕ ಮಾರ್ಸ್ ಸುರೇಶ್ , ʻʻಅಜಿತ್ ಅವರು ರಾಮಮೂರ್ತಿ ನಗರದಲ್ಲಿ ಸುಸಜ್ಜಿತ ಚಿತ್ರಮಂದಿರವನ್ನು‌ ನಿರ್ಮಿಸಿದ್ದಾರೆ. ಈ ಚಿತ್ರಮಂದಿರ ನೋಡಿಕೊಳ್ಳುವ ಉಸ್ತುವಾರಿಯನ್ನು ನನಗೆ ನೀಡಿದ್ದಾರೆ. ನೂರರ ಆಸುಪಾಸಿ‌ನ ಆಸನದ ವ್ಯವಸ್ಥೆಯುಳ್ಳ ನಾಲ್ಕು ಆಡಿಗಳು ಇಲ್ಲಿದೆ. ಈಗಿನ ಆಧುನಿಕ ತಂತ್ರಜ್ಞಾನವನ್ನು ಹೊಂದಿದೆ. ಯಾವುದೇ ಮೂಲೆಯಲ್ಲಿ ಕುಳಿತುಕೊಂಡು ನೋಡಿದರೂ, ಪರದೆಯಲ್ಲಿ ಸಿನಿಮಾ ಚೆನ್ನಾಗಿ ಕಾಣಬೇಕು ಆ ರೀತಿ ಆಸನದ ವ್ಯವಸ್ಥೆ ಮಾಡಲಾಗಿದೆ.

VISTARANEWS.COM


on

V Cinemas multiplex inauguration by dolly dhanjay Ramesh arvind
Koo

ಬೆಂಗಳೂರು: ಕನ್ನಡ ಚಿತ್ರರಂಗದಲ್ಲಿ ಇದೊಂದು ಉತ್ತಮ (V Cinemas) ಬೆಳವಣಿಗೆ ಎಂದರೆ ತಪ್ಪಾಗಲಾರದು. ಚಿತ್ರಮಂದಿರಗಳು ಮುಚ್ಚುತ್ತಿರುವ ಈ ಸಂದರ್ಭದಲ್ಲಿ ನೂತನ ಚಿತ್ರಮಂದಿರ ಪ್ರಾರಂಭವಾಗಿರುವುದು ನಿಜಕ್ಕೂ ಖುಷಿಯ ವಿಚಾರ. ಹೌದು. ಇತ್ತೀಚಿಗೆ ಹೊಯ್ಸಳ ನಗರ, ರಾಮಮೂರ್ತಿ ನಗರದ ಮುಖ್ಯರಸ್ತೆಯಲ್ಲಿ “ವಿ ಸಿನಿಮಾಸ್” ಎಂಬ ನಾಲ್ಕು ಆಡಿಗಳ ಸುಸಜ್ಜಿತ ಮಲ್ಟಿಪ್ಲೆಕ್ಸ್ ಆರಂಭವಾಯಿತು.‌ ರಮೇಶ್ ಅರವಿಂದ್ ಚಿತ್ರಮಂದಿರವನ್ನು ಉದ್ಘಾಟಿಸಿ ಮೊದಲ ಶೋ ಗೆ ಟಿಕೇಟ್ ಪಡೆದರು. ಡಾಲಿ ಧನಂಜಯ ಪ್ರೊಜೆಕ್ಟರ್ ಚಾಲನೆ ಮಾಡಿದರು. ಹಿರಿಯ ವಿತರಕ ಮಾರ್ಸ್ ಸುರೇಶ್, ಮಾಲೀಕರಾದ ಅಜಿತ್ ಜಗದೀಶ್ ಹಾಗೂ ತಂತ್ರಜ್ಞ ಮ್ಯಾಥ್ಯೂ ಮುಂತಾದವರು ಸಮಾರಂಭದಲ್ಲಿ ಉಪಸ್ಥಿತರಿದ್ದರು.

ಅತಿಥಿಗಳನ್ನು ಸ್ವಾಗತಿಸಿ ಮಾತನಾಡಿದ ವಿತರಕ ಮಾರ್ಸ್ ಸುರೇಶ್ , ʻʻಅಜಿತ್ ಅವರು ರಾಮಮೂರ್ತಿ ನಗರದಲ್ಲಿ ಸುಸಜ್ಜಿತ ಚಿತ್ರಮಂದಿರವನ್ನು‌ ನಿರ್ಮಿಸಿದ್ದಾರೆ. ಈ ಚಿತ್ರಮಂದಿರ ನೋಡಿಕೊಳ್ಳುವ ಉಸ್ತುವಾರಿಯನ್ನು ನನಗೆ ನೀಡಿದ್ದಾರೆ. ನೂರರ ಆಸುಪಾಸಿ‌ನ ಆಸನದ ವ್ಯವಸ್ಥೆಯುಳ್ಳ ನಾಲ್ಕು ಆಡಿಗಳು ಇಲ್ಲಿದೆ. ಈಗಿನ ಆಧುನಿಕ ತಂತ್ರಜ್ಞಾನವನ್ನು ಹೊಂದಿದೆ. ಯಾವುದೇ ಮೂಲೆಯಲ್ಲಿ ಕುಳಿತುಕೊಂಡು ನೋಡಿದರೂ, ಪರದೆಯಲ್ಲಿ ಸಿನಿಮಾ ಚೆನ್ನಾಗಿ ಕಾಣಬೇಕು ಆ ರೀತಿ ಆಸನದ ವ್ಯವಸ್ಥೆ ಮಾಡಲಾಗಿದೆ. ಟಿಕೆಟ್ ದರ ಕೂಡ ಬೇರೆ ಮಲ್ಟಿಪ್ಲೆಕ್ಸ್ ಗಳಿಗಿಂತ ತುಂಬಾ ಕಡಿಮೆ ಇರುತ್ತದೆ. ಮೊದಲ ಪ್ರಾಧಾನ್ಯತೆ ಕನ್ನಡ ಚಿತ್ರಗಳಿಗಿರುತ್ತದೆ. ಇಂದು ಮೊದಲ ಚಿತ್ರವಾಗಿ ಡಾಲಿ ಧನಂಜಯ ಅಭಿನಯದ “ಕೋಟಿ” ಚಿತ್ರ ಪ್ರದರ್ಶನವಾಗಿದೆʼʼ ಎಂದರು.

ಇದನ್ನೂ ಓದಿ: Kannada New Movie: ರಾಜವರ್ಧನ್ ನಟನೆಯ ‘ಹಿರಣ್ಯ’ ಸಿನಿಮಾದ ಮೆಲೋಡಿ ಹಾಡು ರಿಲೀಸ್

ಇದನ್ನೂ ಓದಿ: Kannada New Movie: ರಾಜವರ್ಧನ್ ನಟನೆಯ ‘ಹಿರಣ್ಯ’ ಸಿನಿಮಾದ ಮೆಲೋಡಿ ಹಾಡು ರಿಲೀಸ್

ಏನೇ ಆಧುನಿಕ ತಂತ್ರಜ್ಞಾನ ಬಂದರೂ ಥಿಯೇಟರ್ ನಲ್ಲಿ ಸಾವಿರಾರು ಜನರ ಮಧ್ಯೆ ಕುಳಿತು ಸಿನಿಮಾ ನೋಡುವ ಅನುಭವವೇ ಬೇರೆ. ಎಲ್ಲರೂ ಚಿತ್ರಮಂದಿರಗಳಲ್ಲೇ ಚಿತ್ರ ನೋಡಿ. ಚಿತ್ರಮಂದಿರ ಪ್ರಾರಂಭ ಮಾಡಿರುವ ಮಾಲೀಕರಿಗೆ ಹಾಗೂ ಮಾರ್ಸ್ ಸುರೇಶ್ ಅವರಿಗೆ ಅಭಿನಂದನೆಗಳು ಎಂದರು ರಮೇಶ್ ಅರವಿಂದ್.

ಚಿತ್ರಮಂದಿರಲ್ಲಿ ಸಿನಿಮಾ ನೋಡುವ ಖುಷಿ ಮನೆಯಲ್ಲಿ ನೋಡಿದರೆ ಬರುವುದಿಲ್ಲ.. ಎಲ್ಲರೂ ಚಿತ್ರಮಂದಿರಗಳಲ್ಲೇ ಚಿತ್ರವನ್ನು ನೋಡಿ ಆನಂದಿಸಿದಾಗ, ನಮ್ಮಂತಹ ನಟರಿಗೆ ಆಗುವ ಸಂತೋಷ ಅಷ್ಟಿಷ್ಟಲ್ಲ. ಎಲ್ಲರೂ ಚಿತ್ರಮಂದಿರಗಳಲ್ಲೇ ಚಿತ್ರಗಳನ್ನು ನೋಡಿ ಎಂದು ತಿಳಿಸಿದ ಡಾಲಿ ಧನಂಜಯ, “ವಿ ಸಿನಿಮಾಸ್” ಗೆ ಶುಭ ಹಾರೈಸಿದರು.

Continue Reading

ಸ್ಯಾಂಡಲ್ ವುಡ್

Darshan Arrested: ಬಡ್ಡಿ ಕಟ್ಟದವರಿಗೆ ‘ನರಕ’ ಆಗಿತ್ತೇ ಈ ಶೆಡ್? ಇಲ್ಲಿ ನಡೆದಿವೆಯೇ ಇನ್ನಷ್ಟು ಕೊಲೆಗಳು?

Darshan Arrested: ಪಟ್ಟಣಗೆರೆ ವಿನಯ್ ಶೆಡ್‌ನಲ್ಲಿ ಇಂದು ಕೂಡ ಪೊಲೀಸರು ಮಾಹಿತಿಕಲೆ ಹಾಕುತ್ತಿದ್ದಾರೆ. ರೇಣುಕಾಸ್ವಾಮಿ ಕೊಲೆ ಪ್ರಕರಣ ಬೆನ್ನಲೆ ಮತ್ತಷ್ಟು ಪ್ರಕರಣಗಳು ಬೆಳಕಿಗೆ ಬರುವ ಸಾಧ್ಯತೆ ಇದೆ ಎನ್ನಲಾಗಿದೆ. ಮಾಹಿತಿ ಪ್ರಕಾರ ದರ್ಶನ್ ಬಗ್ಗೆ ಅವಹೇಳನಕಾರಿ ಪೋಸ್ಟ್ ಮಾಡಿದ ಅದೇಷ್ಟೋ ಜನರಿಗೆ ಈ ಶೆಡ್‌ನಲ್ಲಿಯೇ ಚಿತ್ರಹಿಂಸೆ ನೀಡಲಾಗಿತ್ತು ಎನ್ನಲಾಗಿದೆ. ಇಂದಿನಿಂದ ಮತ್ತೊಂದು ಹಂತದ ತನಿಖೆಗೆ ಮುಂದಾಗಿದ್ದಾರೆ ಪೊಲೀಸರು. ಎವಿಡೆನ್ಸ್‌ಗಳನ್ನು ಮುಂದಿಟ್ಟುಕೊಂಡು ವಿಚಾರಣೆ ಪೊಲೀಸರು ನಡೆಸುತ್ತಿದ್ದಾರೆ . ಆರೋಪಿಗಳ ಬಳಿ ಇದ್ದ ಹತ್ತು ಮೊಬೈಲ್‌ಗಳನ್ನು ಪೊಲೀಸರು ಜಪ್ತಿ ಮಾಡಿದ್ದಾರೆ.

VISTARANEWS.COM


on

Darshan Arrested renuka shed like hell more murders here
Koo

ಬೆಂಗಳೂರು: ಚಿತ್ರದುರ್ಗದ ರೇಣುಕಾಸ್ವಾಮಿ ಕೊಲೆ ಪ್ರಕರಣದಲ್ಲಿ (Renukaswamy Murder Case) ಜೈಲುಪಾಲಾಗಿರುವ ನಟ ದರ್ಶನ್‌ (Actor Darshan) ಹಾಗೂ ಆತನ ಗ್ಯಾಂಗ್‌ನ ಹಲವು ಆರೋಪಿಗಳನ್ನು ನ್ಯಾಯಾಲಯವು ಮತ್ತೆ ಐದು ದಿನಗಳವರೆಗೆ ಪೊಲೀಸ್‌ ಕಸ್ಟಡಿಗೆ (Police Custody) ನೀಡಿದೆ. ಇನ್ನು ಪ್ರಕರಣಕ್ಕೆ ಸಂಬಂಧಿಸಿದಂತೆ ಪೊಲೀಸರು ತನಿಖೆಯನ್ನು ಚುರುಕುಗೊಳಿಸಿದ್ದಾರೆ. ರೇಣುಕಾಸ್ವಾಮಿ ಕೊಲೆ‌ ಮಾಡಿದ ಶೆಡ್ ಮೇಲೆ ಕೂಡ ನೂರೆಂಟು ಅನುಮಾನ ಹುಟ್ಟಿಕೊಂಡಿದ್ದು, ರೇಣುಕಾಸ್ವಾಮಿ ಕೊಲೆ ಮಾಡಿದ ಶೆಡ್ ಇಂದು ಕೂಡಾ ಪೊಲೀಸ್ ವಶಕ್ಕೆ ಇರಲಿದೆ.

ಪಟ್ಟಣಗೆರೆ ವಿನಯ್ ಶೆಡ್‌ನಲ್ಲಿ ಇಂದು ಕೂಡ ಪೊಲೀಸರು ಮಾಹಿತಿಕಲೆ ಹಾಕುತ್ತಿದ್ದಾರೆ. ರೇಣುಕಾಸ್ವಾಮಿ ಕೊಲೆ ಪ್ರಕರಣ ಬೆನ್ನಲೆ ಮತ್ತಷ್ಟು ಪ್ರಕರಣಗಳು ಬೆಳಕಿಗೆ ಬರುವ ಸಾಧ್ಯತೆ ಇದೆ ಎನ್ನಲಾಗಿದೆ. ಮಾಹಿತಿ ಪ್ರಕಾರ ದರ್ಶನ್ ಬಗ್ಗೆ ಅವಹೇಳನಕಾರಿ ಪೋಸ್ಟ್ ಮಾಡಿದ ಅದೇಷ್ಟೋ ಜನರಿಗೆ ಈ ಶೆಡ್‌ನಲ್ಲಿಯೇ ಚಿತ್ರಹಿಂಸೆ ನೀಡಲಾಗಿತ್ತು ಎನ್ನಲಾಗಿದೆ. ದರ್ಶನ್ ವಿರುದ್ಧ ಮಾತನಾಡಿದವರಿಗೆ ಇದೇ ಶೆಡ್ ನಲ್ಲಿ ಕರೆತಂದು ʻಡಿ ಗ್ಯಾಂಗ್ʼ ಹೊಡೆಯುತ್ತಿದ್ದರು ಎನ್ನಲಾಗಿದೆ. ಬಡ್ಡಿ ದುಡ್ಡು ಕಟ್ಟದ, ಲೋನ್ ಪಾವತಿ ಮಾಡದವರಿಗೆ ಕೂಡ ಇದೇ ಶೆಡ್‌ನಲ್ಲಿ ʻಡಿ ಗ್ಯಾಂಗ್ʼ ನರಕ ತೋರಿಸುತ್ತಿತ್ತು ಎನ್ನಲಾಗಿದೆ. ರೇಣುಕಾಸ್ವಾಮಿ ಕೊಲೆ ಕೇಸ್ ಬೆನ್ನಲೆ ಮತ್ತಷ್ಟು ಕೇಸ್‌ಗಳು ರಿವೀಲ್‌ ಆಗಬಹುದು ಎನ್ನಲಾಗಿದೆ. ಪೊಲೀಸರು ವಶಪಡಿಸಿಕೊಂಡ ಸಿಸಿ ಕ್ಯಾಮರೆ ದೃಶ್ಯಗಳ ಪರಿಶೀಲನೆ ಆಗುತ್ತಿದೆ. ಆರೋಪಿ ವಿನಯ್ ಸೇರಿದಂತೆ ಇತರೆ ಆರೋಪಿಗಳನ್ನು ಮತಷ್ಟು ತೀವ್ರವಾಗಿ ಪೊಲೀಸರು ವಿಚಾರಣೆ ನಡೆಸುತ್ತಿದ್ದಾರೆ. ರೇಣುಕಾಸ್ವಾಮಿ ಮಾದರಿಯಲ್ಲಿಯೇ ಹಲವು ಜನರಿಗೆ ಗ್ಯಾಂಗ್‌ ಚಿತ್ರಹಿಂಸೆ ನೀಡಿತ್ತಾ ಎಂಬುದುರ ಬಗ್ಗೆ ಮಾಹಿತಿ ಕಲೆ ಹಾಕುತ್ತಿದ್ದಾರೆ ಪೊಲೀಸರು.

ಇದನ್ನೂ ಓದಿ: Darshan Arrested: `ಅಪ್ಪ, ನೀವೇ ನನ್ನ ಹೀರೊʼಎಂದ ದರ್ಶನ್‌ ಪುತ್ರ; ಫಾದರ್ಸ್‌ ಡೇಗೆ ಭಾವುಕ ಪೋಸ್ಟ್‌!

ಇಂದಿನಿಂದ ಮತ್ತೊಂದು ಹಂತದ ತನಿಖೆಗೆ ಮುಂದಾಗಿದ್ದಾರೆ ಪೊಲೀಸರು. ಎವಿಡೆನ್ಸ್‌ಗಳನ್ನು ಮುಂದಿಟ್ಟುಕೊಂಡು ವಿಚಾರಣೆ ಪೊಲೀಸರು ನಡೆಸುತ್ತಿದ್ದಾರೆ . ಆರೋಪಿಗಳ ಬಳಿ ಇದ್ದ ಹತ್ತು ಮೊಬೈಲ್‌ಗಳನ್ನು ಪೊಲೀಸರು ಜಪ್ತಿ ಮಾಡಿದ್ದಾರೆ. ಮೊಬೈಲ್‌ನಲ್ಲಿ ಕೆಲ ಸ್ಫೋಟಕ ವಿಚಾರಗಳು ಪತ್ತೆಯಾಗಿವೆ. ವೆಪನ್ ಗಳು, 30 ಲಕ್ಷ ರೂ. ಹಣ, ಕಾರುಗಳು ಸೇರಿ ಹಲವು ವಸ್ತುಗಳು ಜಪ್ತಿಯಾಗಿವೆ. ಈಗಾಗಲೇ ಆರೋಪಿಗಳನ್ನು ವಿಚಾರಣೆ ಮಾಡಿ ಪೊಲೀಸರು ಹೇಳಿಕೆ ದಾಖಲಿಸಿಕೊಂಡಿದ್ದಾರೆ.

ಪ್ರಶ್ನೆಗಳ ಸುರಿಮಳೆ

ಶರಣಾಗಿರುವ ಆರೋಪಿಗಳನ್ನು ಡ್ರಿಲ್‌ ಮಾಡುತ್ತಿರುವ ಪೊಲೀಸರು, ಪ್ರಶ್ನೆಗಳ ಸುರಿಮಳೆಗೈಯುತ್ತಿದ್ದಾರೆ. ಪ್ರಕರಣದ ಸಂಬಂಧ ನೀವೇನಾದರೂ ಹಣ ಪಡೆದಿದ್ರಾ? ನಿಮ್ಮನ್ನು ಸಂಪರ್ಕಿಸಿದವರು ಯಾರು? ಯಾರ ಮಾತನ್ನು ನೀವು ಕೇಳಿ ನೀವು ಪ್ರಕರಣದಲ್ಲಿ ಭಾಗಿಯಾದಿರಿ? ದರ್ಶನ ಜತೆ ನೀವೇನಾದರೂ ನೇರವಾಗಿ ಸಂಪರ್ಕದಲ್ಲಿ ಇದ್ರಾ? ಆರೋಪಿ ರಘು ನಿಮ್ಮನ್ನು ಭೇಟಿಯಾಗಿ ಹೇಳಿದ್ದೇನು? ಶೆಡ್‌ ಒಳಗೆ ಯಾರೆಲ್ಲ ಹೋದರು? ನೀವೂ ಹೋಗಿದ್ರಾ ಎಂಬುದು ಸೇರಿ ಹತ್ತಾರು ಪ್ರಶ್ನೆಗಳನ್ನು ಕೇಳಿದ್ದಾರೆ ಎಂದು ತಿಳಿದುಬಂದಿದೆ.

Continue Reading

ಸ್ಯಾಂಡಲ್ ವುಡ್

Darshan Arrested: `ಅಪ್ಪ, ನೀವೇ ನನ್ನ ಹೀರೊʼಎಂದ ದರ್ಶನ್‌ ಪುತ್ರ; ಫಾದರ್ಸ್‌ ಡೇಗೆ ಭಾವುಕ ಪೋಸ್ಟ್‌!

Darshan Arrested: ತಂದೆ ಜತೆಗಿನ ಒಂದಷ್ಟು ಫೋಟೊಗಳನ್ನು ಕೊಲಾಜ್ ಮಾಡಿ ಹಾಕಿಕೊಂಡಿದ್ದಾನೆ. 15 ವರ್ಷ ವಯಸ್ಸಿನ ವಿನೀಶ್ ಹೈಸ್ಕೂಲ್‌ನಲ್ಲಿ ಓದುತ್ತಿದ್ದಾನೆ. ಕೊಲೆ ಪ್ರಕರಣದಲ್ಲಿ ಪೊಲೀಸ್ ಕಸ್ಟಡಿಯಲ್ಲಿರುವ ತಂದೆಗೆ ವಿನೀಶ್ ಸೋಶಿಯಲ್ ಮೀಡಿಯಾದಲ್ಲಿ ಶುಭ ಕೋರುವಂತಾಗಿದೆ.ಗೆಳತಿ ಪವಿತ್ರಾ ಗೌಡ (Pavithra Gowda) ಅವರಿಗೆ ಅಶ್ಲೀಲವಾಗಿ ಮೆಸೇಜ್‌ ಮಾಡಿದ ರೇಣುಕಾಚಾರ್ಯ ಎಂಬ ಯುವಕನ ಕೊಲೆ ಪ್ರಕರಣದಲ್ಲಿ ನಟ ದರ್ಶನ್‌ (Actor Darshan), ಪವಿತ್ರಾ ಗೌಡ ಸೇರಿ ಹಲವರನ್ನು ಪೊಲೀಸರು ಅರೆಸ್ಟ್‌ ಮಾಡಿದ್ದಾರೆ.

VISTARANEWS.COM


on

Darshan Arrested vinish write special message for darshan fathers day
Koo

ಬೆಂಗಳೂರು: ತಂದೆ – ತಾಯಿ ಪ್ರತಿಯೊಬ್ಬರ ಜೀವನದಲ್ಲಿ ಬಹಳ ಅಮೂಲ್ಯವಾದವರು. ಅವರಲ್ಲಿ ನಾವು ಯಾರನ್ನೇ ಕಳೆದುಕೊಂಡರೂ (Darshan Arrested) ಆಘಾತದ ಸಿಡಿಲು ಬಡಿಯುವುದಂತೂ ಖಂಡಿತ. ಹಾಗಾಗಿ ತಂದೆ ತಾಯಿಯ ಋಣ, ಪ್ರೀತಿ, ಮಮತೆ ಯಾವತ್ತೂ ಮರೆಯಲಾಗದು.  ಇವತ್ತು(ಜೂನ್ 16) ವಿಶ್ವ ತಂದೆಯಂದಿರ ದಿನ ಆಚರಿಸಲಾಗುತ್ತಿದೆ. ಈ ಸಂದರ್ಭದಲ್ಲಿ ದರ್ಶನ್ ಪುತ್ರ ವಿನೀಶ್ ಸೋಶಿಯಲ್ ಮೀಡಿಯಾದಲ್ಲಿ ತಂದೆಯಂದಿರ ದಿನದ ಶುಭ ಕೋರಿದ್ದಾನೆ. ದರ್ಶನ್‌ಗೆ ಒಬ್ಬನೇ ಮಗ ವಿನೀಶ್.”ಹ್ಯಾಪಿ ಫಾದರ್ಸ್ ಡೇ ಅಪ್ಪ. ನಾನು ನಿಮ್ಮನ್ನು ಬಹಳ ಮಿಸ್ ಮಾಡಿಕೊಳ್ತಿದ್ದೀನಿ. ಐ ಲವ್ ಯು. ಯಾವಾಗಲೂ ನೀವೇ ನನ್ನ ಹೀರೊ” ಎಂದು ವಿನೀಶ್ ಇನ್‌ಸ್ಟಾಗ್ರಾಮ್ ಸ್ಟೋರಿಯಲ್ಲಿ ಬರೆದುಕೊಂಡಿದ್ದಾನೆ.

ತಂದೆ ಜತೆಗಿನ ಒಂದಷ್ಟು ಫೋಟೊಗಳನ್ನು ಕೊಲಾಜ್ ಮಾಡಿ ಹಾಕಿಕೊಂಡಿದ್ದಾನೆ. 15 ವರ್ಷ ವಯಸ್ಸಿನ ವಿನೀಶ್ ಹೈಸ್ಕೂಲ್‌ನಲ್ಲಿ ಓದುತ್ತಿದ್ದಾನೆ. ಕೊಲೆ ಪ್ರಕರಣದಲ್ಲಿ ಪೊಲೀಸ್ ಕಸ್ಟಡಿಯಲ್ಲಿರುವ ತಂದೆಗೆ ವಿನೀಶ್ ಸೋಶಿಯಲ್ ಮೀಡಿಯಾದಲ್ಲಿ ಶುಭ ಕೋರುವಂತಾಗಿದೆ.

ಅಪ್ಪನನ್ನು ಬೈದಿದ್ದಕ್ಕೆ ಥ್ಯಾಂಕ್ಸ್‌ ಎಂದಿದ್ದ ದರ್ಶನ್‌ ಪುತ್ರ ವಿನೀಶ್

ಗೆಳತಿ ಪವಿತ್ರಾ ಗೌಡ (Pavithra Gowda) ಅವರಿಗೆ ಅಶ್ಲೀಲವಾಗಿ ಮೆಸೇಜ್‌ ಮಾಡಿದ ರೇಣುಕಾಚಾರ್ಯ ಎಂಬ ಯುವಕನ ಕೊಲೆ ಪ್ರಕರಣದಲ್ಲಿ ನಟ ದರ್ಶನ್‌ (Actor Darshan), ಪವಿತ್ರಾ ಗೌಡ ಸೇರಿ ಹಲವರನ್ನು ಪೊಲೀಸರು ಅರೆಸ್ಟ್‌ ಮಾಡಿದ್ದಾರೆ. ಸಾಮಾಜಿಕ ಜಾಲತಾಣಗಳಲ್ಲಿ ನಟನ ವಿರುದ್ಧ ಜನ ಅಭಿಪ್ರಾಯ ವ್ಯಕ್ತಪಡಿಸುತ್ತಿದ್ದಾರೆ. ಇದರ ಮಧ್ಯೆಯೇ, ದರ್ಶನ್‌ ಪುತ್ರ ವಿನೀಶ್‌ ತೂಗುದೀಪ (Vineesh Thoogudeepa) ಭಾವನಾತ್ಮಕ ಪೋಸ್ಟ್‌ ಮಾಡಿದ್ದ.

ಇದನ್ನೂ ಓದಿ: Darshan Arrested : ಅನ್ನಪೂರ್ಣೇಶ್ವರಿ ನಗರ ಪೊಲೀಸ್​ ಠಾಣೆಯಲ್ಲಿ ಬೀಗರೂಟವೇ? ಶಾಮಿಯಾನ ಹಾಕಿದ ಪೊಲೀಸರ ನಡೆ ಫುಲ್ ಟ್ರೋಲ್​!

“ನನ್ನ ತಂದೆಯ ಬಗ್ಗೆ ಕೆಟ್ಟ ಕಮೆಂಟ್‌ಗಳನ್ನು ಮಾಡಿ, ಅಶ್ಲೀಲ ಭಾಷೆಯಲ್ಲಿ ನಿಂದಿಸಿದ್ದಕ್ಕೆ ನಿಮಗೆಲ್ಲ ಧನ್ಯವಾದಗಳು. ನಾನು 15 ವರ್ಷದ ಬಾಲಕ, ನನಗೂ ಭಾವನೆಗಳಿವೆ ಎಂಬುದನ್ನು ನೀವು ಪರಿಗಣಿಸಲೇ ಇಲ್ಲ. ಇಂತಹ ಕೆಟ್ಟ ಸಮಯದಲ್ಲಿ ನನ್ನ ತಾಯಿ ಹಾಗೂ ತಂದೆಗೆ ನಿಮ್ಮ ಬೆಂಬಲದ ಅಗತ್ಯವಿದೆ. ನೀವು ನನಗೆ ಶಾಪ ಹಾಕುವುದರಿಂದ ಯಾವುದೇ ಬದಲಾವಣೆ ಆಗುವುದಿಲ್ಲ” ಎಂದು ತಂದೆಯ ಬಂಧನ, ಜನರ ಆಕ್ರೋಶ, ಕೆಟ್ಟ ಕಮೆಂಟ್‌ಗಳ ಬಗ್ಗೆ ವಿನೀಶ್‌ ತೂಗುದೀಪ ಬೇಸರದ ಪೋಸ್ಟ್‌ ಮಾಡಿದ್ದ.

ಮೈಸೂರಲ್ಲಿ ಕೂತು ಕೇಸ್‌ ಮುಚ್ಚಿಹಾಕಲು ದರ್ಶನ್‌ ಯತ್ನ

ಚಿತ್ರದುರ್ಗ ನಿವಾಸಿ ರೇಣುಕಾಸ್ವಾಮಿ ಕೊಲೆ (Renukaswamy Murder Case) ಪ್ರಕರಣಕ್ಕೆ ಸಂಬಂಧಿಸಿಂದತೆ ಬಗೆದಷ್ಟೂ ಮಾಹಿತಿ ಬಹಿರಂಗವಾಗುತ್ತಿದೆ. ದರ್ಶನ್‌ ಹಾಗೂ ಗ್ಯಾಂಗ್‌ನನ್ನು ಮತ್ತೆ 5 ದಿನ ಕಸ್ಟಡಿಗೆ ಪಡೆದಿರುವ ಪೊಲೀಸರು ತನಿಖೆ ಚುರುಕುಗೊಳಿಸಿದ್ದು, ಭಾನುವಾರ ಮೈಸೂರಿನಲ್ಲಿ (Mysore) ಸ್ಥಳ ಮಹಜರು ನಡೆಸಲಿದ್ದಾರೆ.

ಡೆವಿಲ್‌ ಸಿನಿಮಾದ ಚಿತ್ರೀಕರಣದ ಹಿನ್ನೆಲೆಯಲ್ಲಿ ದರ್ಶನ್‌ ಮೈಸೂರಿನಲ್ಲಿಯೇ ಬೀಡುಬಿಟ್ಟಿದ್ದರು. ರೇಣುಕಾಸ್ವಾಮಿ ಕೊಲೆಯ ಬಳಿಕವೂ ಮೈಸೂರಿಗೆ ತೆರಳಿದ ದರ್ಶನ್‌, ಅಲ್ಲಿಂದಲೇ ಗಣ್ಯರು ಹಾಗೂ ಆಪ್ತರಿಗೆ ಕರೆ ಮಾಡಿ ಪ್ರಕರಣವನ್ನು ಮುಚ್ಚಿಹಾಕುವ ಸಾಧ್ಯತೆ ಇದೆ ಎನ್ನಲಾಗಿದೆ. ಪ್ರಕರಣ ಮುಚ್ಚಿಹಾಕಲು ಯತ್ನಿಸಿದ ನಟ, ಜಿಮ್‌ನಲ್ಲಿ ವರ್ಕೌಟ್‌ ಮಾಡುವ ಮೂಲಕ ಏನೂ ನಡೆದೇ ಇಲ್ಲ ಎಂಬಂತೆ ತೋರಿಸಿಕೊಳ್ಳಲು ಪ್ರಯತ್ನ ಮಾಡಿದ್ದಾರೆ. ಇದೆಲ್ಲದರ ಕುರಿತು ಪೊಲೀಸರು ತನಿಖೆ ನಡೆಸಲಿದ್ದಾರೆ.

ಮೈಸೂರಿನ ಇಟ್ಟಿಗೆಗೂಡಿನಲ್ಲಿರುವ ರ‍್ಯಾಡಿಷನ್‌ ಹೋಟೆಲ್‌, ಕುವೆಂಪು ನಗರದ ಗೋಲ್ಡ್‌ ಜಿಮ್‌ ಸೇರಿದಂತೆ ಪೊಲೀಸರು ಹಲವು ಸ್ಥಳಗಳನ್ನು ಮಹಜರು ಮಾಡಲಿದ್ದಾರೆ. ನಟ ದರ್ಶನ್‌ ಸೇರಿ ಹಲವು ಆರೋಪಿಗಳನ್ನು ಕರೆದುಕೊಂಡು ಹೋಗಿ ಮಹಜರು ಮಾಡಲಿದ್ದಾರೆ. ಮೈಸೂರಿನಲ್ಲಿ ದರ್ಶನ್‌ ಯಾರಿಗೆ ಕರೆ ಮಾಡಿದ್ದರು? ಯಾರ ಮೂಲಕ ಪ್ರಭಾವ ಬೀರಲು ಪ್ರಯತ್ನಿಸಿದರು ಎಂಬುದು ಸೇರಿ ಹಲವು ಆಯಾಮಗಳಲ್ಲಿ ಪೊಲೀಸರು ತನಿಖೆ ನಡೆಸಲಿದ್ದಾರೆ ಎಂದು ತಿಳಿದುಬಂದಿದೆ.

Continue Reading

ಸ್ಯಾಂಡಲ್ ವುಡ್

Kannada New Movie : ಆರ್​ಜೆ ಪ್ರದೀಪ್​ರ ‘ಮರ್ಯಾದೆ ಪ್ರಶ್ನ’ಗೆ ಆಲ್​ ಓಕೆಯ ಸಖತ್‌ ಹಾಡು!

Kannada New Movie : ಆರ್ ಜೆ ಪ್ರದೀಪ್ ಪ್ರದೀಪ್ ಒಡೆತನದ ಸಕ್ಕತ್ ಸ್ಟುಡಿಯೋ ಬಹಳ ಕ್ರಿಯೇಟಿವ್ ಆಗಿ ಮರ್ಯಾದೆ ಪ್ರಶ್ನೆ ಸಿನಿಮಾವನ್ನು ಪ್ರಮೋಷನ್ ಮಾಡ್ತಿದೆ. RCB ಕಪ್ ಗೆಲ್ಬೇಕು ಎಂದು ಕೊಹ್ಲಿ ತಂಡಕ್ಕೆ ಚಿಯರ್ ಹೇಳುವ ಹಾಡು ನಿರ್ಮಿಸಿದ್ದ ಸಕ್ಕತ್ ಸ್ಟುಡಿಯೊ, ಈಗ ʻಆಲ್ ಓಕೆʼ ಕಡೆಯಿಂದಲೂ ಮರ್ಯಾದೆ ಪ್ರಶ್ನೆಗಳಿಗೆ ಉತ್ತರ ಕೊಟ್ಟಿದೆ. ಕನ್ನಡದ ಖ್ಯಾತ ರ್‍ಯಾಪರ್ ಆಲ್ ಓಕೆ ಮಿಡ್ಡ್ಲ್ ಕ್ಲಾಸ್ ಮಂದಿಯ ಸಡಗರಗಳ ಬಗ್ಗೆ ಬಹಳ ಅರ್ಥಪೂರ್ಣವಾದ ಗೀತೆಯೊಂದನ್ನು ತಯಾರಿಸಿದ್ದು ಸಕ್ಕತ್ ಸ್ಟುಡಿಯೋ ಈ ಹಾಡನ್ನು ನಿರ್ಮಿಸಿದೆ.

VISTARANEWS.COM


on

Kannada New Movie Maryade Prashne out now
Koo

ಬೆಂಗಳೂರು: ಚಂದನವನದಲ್ಲಿ (Kannada New Movie ) ಇತ್ತೀಚೆಗೆ ಸಖತ್ ಸುದ್ದಿ ಆಗುತ್ತಿರುವ ಸಿನಿಮಾ ಎಂದರೆ ‘ಮರ್ಯಾದೆ ಪ್ರಶ್ನೆ’. ಹೌದು ‘ಸಕ್ಕತ್ ಸ್ಟುಡಿಯೊ’ ಮೂಲಕ ಆರ್ ಜೆ ಪ್ರದೀಪ್ ಅವರು ನಿರ್ಮಾಣ ಮಾಡುತ್ತಿರುವ ಮೊದಲ ಸಿನಿಮಾದ ಹೆಸರೇ ” ಮರ್ಯಾದೆ ಪ್ರಶ್ನೆ “. ಸಕ್ಕತ್ ಕಂಟೆಂಟ್‌ಗಳ ಮೂಲಕವೇ ಪ್ರೇಕ್ಷಕರ ಗಮನಸೆಳೆಯುತ್ತಿರುವ ಸಕ್ಕತ್ ಸ್ಟುಡಿಯೋ ನಮ್ಮ ಚಿತ್ರರಂಗದ ಸೆಲಿಬ್ರಿಟಿಸ್ ಅವರವರ ಜೀವನದ “ಮರ್ಯಾದೆ ಪ್ರಶ್ನೆ ” ಬಗ್ಗೆ ಪೋಸ್ಟ್ ಮಾಡುವ ಮೂಲಕ ಶೀರ್ಷಿಕೆ ಬಿಡುಗಡೆ ಮಾಡಿದ್ದರು.

ಆರ್ ಜೆ ಪ್ರದೀಪ್ ಪ್ರದೀಪ್ ಒಡೆತನದ ಸಕ್ಕತ್ ಸ್ಟುಡಿಯೋ ಬಹಳ ಕ್ರಿಯೇಟಿವ್ ಆಗಿ ಮರ್ಯಾದೆ ಪ್ರಶ್ನೆ ಸಿನಿಮಾವನ್ನು ಪ್ರಮೋಷನ್ ಮಾಡ್ತಿದೆ. RCB ಕಪ್ ಗೆಲ್ಬೇಕು ಎಂದು ಕೊಹ್ಲಿ ತಂಡಕ್ಕೆ ಚಿಯರ್ ಹೇಳುವ ಹಾಡು ನಿರ್ಮಿಸಿದ್ದ ಸಕ್ಕತ್ ಸ್ಟುಡಿಯೊ, ಈಗ ʻಆಲ್ ಓಕೆʼ ಕಡೆಯಿಂದಲೂ ಮರ್ಯಾದೆ ಪ್ರಶ್ನೆಗಳಿಗೆ ಉತ್ತರ ಕೊಟ್ಟಿದೆ. ಕನ್ನಡದ ಖ್ಯಾತ ರ್‍ಯಾಪರ್ ಆಲ್ ಓಕೆ ಮಿಡ್ಡ್ಲ್ ಕ್ಲಾಸ್ ಮಂದಿಯ ಸಡಗರಗಳ ಬಗ್ಗೆ ಬಹಳ ಅರ್ಥಪೂರ್ಣವಾದ ಗೀತೆಯೊಂದನ್ನು ತಯಾರಿಸಿದ್ದು ಸಕ್ಕತ್ ಸ್ಟುಡಿಯೋ ಈ ಹಾಡನ್ನು ನಿರ್ಮಿಸಿದೆ.

ಈ ಹಾಡಿನ ಮೂಲಕ ಕನ್ನಡ ಚಿತ್ರರಂಗದ ಎಲ್ರಿಗೂ “ಒಗ್ಗಟ್ಟಾಗಿ ದುಡಿಯುವ ಬೆಳೆಯುವ ಹಾಗೂ ಸ್ಟಾರ್ ಸಿನಿಮಾಗಳ ಜೊತೆಗೆ ಹೊಸ ಪ್ರಯತ್ನಗಳಿಗೂ ಜನ ಜೈ ಎನ್ನಬೇಕು. ಇದು ಬರೀ ಮರ್ಯಾದೆ ಪ್ರಶ್ನೆ ಅಲ್ಲಾ ನಮ್ಮೆಲ್ಲರ ಉಳಿವಿನ ಪ್ರಶ್ನೆ ” ಎಂಬ ಗಟ್ಟಿ ಕೂಗೊಂದನ್ನು ನೀಡಿದ್ದಾರೆ.

ಇದನ್ನೂ ಓದಿ: Kannada New Movie: ರಾಜವರ್ಧನ್ ನಟನೆಯ ‘ಹಿರಣ್ಯ’ ಸಿನಿಮಾದ ಮೆಲೋಡಿ ಹಾಡು ರಿಲೀಸ್

ಮರ್ಯಾದೆ ಪ್ರಶ್ನೆ , ನಿರ್ಮಾಣದ ಜೊತೆಗೆ ಪ್ರದೀಪ್ ಕತೆ ಬರೆದಿದ್ದಾರೆ. ಕ್ರಿಯೆಟಿವ್ ಹೆಡ್ ಕೂಡ ಆಗಿದ್ದಾರೆ. ಈ ಮೂಲಕ ಕನ್ನಡಕ್ಕೆ ಹೊಸದೊಂದು ಕಥೆ ಕೊಡೊಕೆ ರೆಡಿ ಆಗಿದ್ದಾರೆ. ಮರ್ಯಾದೆ ಪ್ರಶ್ನೆ ಚಿತ್ರವನ್ನ ನಾಗರಾಜ್ ಸೋಮಯಾಜಿ ನಿರ್ದೇಶನ ಮಾಡಿದ್ದಾರೆ.

ಈ ಹಿಂದೆ ಇವರು ದಿ ಬೆಸ್ಟ್ ಆ್ಯಕ್ಟರ್, ಮೈಕ್ರೋ ಮೂವಿ ಮಾಡಿದ್ದರು. ಮರ್ಯಾದೆ ಪ್ರಶ್ನೆ ಚಿತ್ರಕ್ಕೆ ಸಂದೀಪ್ ವೆಲ್ಲುರಿ ಕ್ಯಾಮರಾವರ್ಕ್ ಮಾಡಿದ್ದಾರೆ. ಅರ್ಜುನ್ ರಾಮು ಸಂಗೀತ ಕೊಟ್ಟಿದ್ದಾರೆ. ಚಿತ್ರದ ಪ್ರಮುಖ ಪಾತ್ರಗಳಲ್ಲಿ ಯಾರೆಲ್ಲ ಇದ್ದಾರೆ ಅನ್ನೋ ಕುತೂಹಲ ಇದೆ. ಕನ್ನಡದ ಅದ್ಭುತ ಕಲಾವಿದರ ದಂಡೇ ಇದರಲ್ಲಿದೆ ಎಂಬ ಮಾಹಿತಿಯಿದೆ . ಅತಿ ಶೀಘ್ರದಲ್ಲೇ ಆ ವಿವರಗಳನ್ನು ಜನರಿಗೆ ನೀಡುವ ತಯಾರಿಯಲ್ಲಿದ್ದಾರೆ .

Continue Reading
Advertisement
Euro 2024
ಕ್ರೀಡೆ9 mins ago

Euro 2024: ಡೆನ್ಮಾರ್ಕ್ ಸವಾಲನ್ನು ಮೆಟ್ಟಿ ನಿಂತೀತೇ ಸ್ಲೊವೇನಿಯಾ?; ಬಲಾಬಲ ಹೇಗಿದೆ?

Renuka Swamy murder
ಪ್ರಮುಖ ಸುದ್ದಿ10 mins ago

Renuka Swamy Murder:‌ ರೇಣುಕಾಸ್ವಾಮಿಗೆ 4 ಬಾರಿ ಎಲೆಕ್ಟ್ರಿಕ್ ಶಾಕ್; ಪೋಸ್ಟ್ ಮಾರ್ಟಂ ವರದಿಯಲ್ಲಿವೆ ಭಯಾನಕ ಅಂಶಗಳು!

Elon Musk
ಪ್ರಮುಖ ಸುದ್ದಿ52 mins ago

Elon Musk: ಕೃತಕ ಬುದ್ಧಿಮತ್ತೆ ಬಳಸಿ ಇವಿಎಂಗಳ ಹ್ಯಾಕಿಂಗ್‌ ಸಾಧ್ಯ ಎಲಾನ್‌ ಮಸ್ಕ್‌; ಬಿಜೆಪಿ ನಾಯಕ ಟಾಂಗ್!‌

Shootout Case
ಪ್ರಮುಖ ಸುದ್ದಿ55 mins ago

Shootout Case: ಭೀಮಾ ತೀರದಲ್ಲಿ ಗುಂಡಿನ ದಾಳಿ; ರೌಡಿಶೀಟರ್‌ ಸ್ಥಳದಲ್ಲೇ ಸಾವು

kusina mane
ರಾಮನಗರ56 mins ago

Kusina Mane: ಗ್ರಾಮೀಣ ಮಹಿಳೆಯರ ಪಾಲಿಗೆ ವರದಾನವಾದ ಕೂಸಿನ ಮನೆ; ಮಕ್ಕಳ ದಾಖಲಾತಿ ಹೆಚ್ಚಳ

Job Alert
ಉದ್ಯೋಗ1 hour ago

Job Alert: ನ್ಯಾಷನಲ್ ಫರ್ಟಿಲೈಸರ್ಸ್ ಲಿಮಿಟೆಡ್‌ನಲ್ಲಿದೆ 164 ಹುದ್ದೆ; ಆನ್‌ಲೈನ್‌ ಮೂಲಕ ಅಪ್ಲೈ ಮಾಡಿ

murder case in Bengaluru rural
ಬೆಂಗಳೂರು ಗ್ರಾಮಾಂತರ1 hour ago

Murder case : ತಾಯಿಗೆ ಚಿತ್ರಹಿಂಸೆ ನೀಡುತ್ತಿದ್ದ ಬಾಯ್‌ಫ್ರೆಂಡ್‌ನನ್ನು ಕೊಂದು ಮುಗಿಸಿದ ಮಗ

V Cinemas multiplex inauguration by dolly dhanjay Ramesh arvind
ಸ್ಯಾಂಡಲ್ ವುಡ್1 hour ago

V Cinemas: ರಮೇಶ್ ಅರವಿಂದ್ – ಡಾಲಿ ಧನಂಜಯರಿಂದ ‘ವಿ ಸಿನಿಮಾಸ್’ ಮಲ್ಟಿಪ್ಲೆಕ್ಸ್ ಉದ್ಘಾಟನೆ

Petrol Diesel Price
ರಾಜಕೀಯ2 hours ago

Petrol Diesel Price: ಪೆಟ್ರೋಲ್, ಡೀಸೆಲ್ ದರ ಹೆಚ್ಚಳ ಖಂಡಿಸಿ ನಾಳೆ ರಾಜ್ಯಾದ್ಯಂತ ಬಿಜೆಪಿ ಪ್ರತಿಭಟನೆ

Team India Coach
ಕ್ರೀಡೆ2 hours ago

Team India Coach: ಭಾರತ ತಂಡದ ಕೋಚ್​ ಆಗಿ ಗಂಭೀರ್​ ಆಯ್ಕೆ; ಶೀಘ್ರದಲ್ಲೇ ಅಧಿಕೃತ ಘೋಷಣೆ

Sharmitha Gowda in bikini
ಕಿರುತೆರೆ8 months ago

Geetha Serial Kannada: ನಿದ್ದೆ ಕದ್ದ ಚೋರಿ! ನಟಿ `ಭಾನುಮತಿ’ ಹಾಟ್‌ ಪೋಟೊಗಳಿಗೆ ಫ್ಯಾನ್ಸ್ ಫುಲ್ ಫಿದಾ

Kannada Serials
ಕಿರುತೆರೆ8 months ago

Kannada Serials TRP: 2ನೇ ಸ್ಥಾನದಲ್ಲಿ 2 ಧಾರಾವಾಹಿಗಳು; ಟಿಆರ್‌ಪಿ ರೇಸ್‌ನಲ್ಲಿಲ್ಲ ಭಾಗ್ಯಲಕ್ಷ್ಮೀ!

Bigg Boss- Saregamapa 20 average TRP
ಕಿರುತೆರೆ8 months ago

Kannada Serials TRP: ಏಳನೇ ಸ್ಥಾನಕ್ಕೆ ʻಅಮೃತಧಾರೆʼ ಕುಸಿತ; ಬಿಗ್‌ ಬಾಸ್‌-ಸರಿಗಮಪ ಟಿಆರ್‌ಪಿ ಎಷ್ಟು?

galipata neetu
ಕಿರುತೆರೆ7 months ago

Kanyadana Serial: ಕಿರುತೆರೆಗೆ ಮತ್ತೆ ಎಂಟ್ರಿ ಕೊಟ್ಟ ʻಗಾಳಿಪಟʼ ಖ್ಯಾತಿಯ ʻನೀತುʼ!

Kannada Serials
ಕಿರುತೆರೆ9 months ago

Kannada Serials TRP: ನಾಲ್ಕನೇ ಸ್ಥಾನಕ್ಕೆ ಕುಸಿತ ಕಂಡ ʻಸೀತಾ ರಾಮʼ; ಟಿಆರ್‌ಪಿ ರೇಸ್‌ಗೆ ʻಭಾಗ್ಯಲಕ್ಷ್ಮಿʼ ಬ್ಯಾಕ್‌!

Kannada Serials
ಕಿರುತೆರೆ8 months ago

Kannada Serials TRP: ಟಿಆರ್‌ಪಿಯಲ್ಲಿ ʻಭಾಗ್ಯಲಕ್ಷ್ಮೀʼ ಹವಾ; ʻಪುಟ್ಟಕ್ಕನ ಮಕ್ಕಳುʼ ಧಾರಾವಾಹಿಗೆ ಸಂಕಷ್ಟ!

Bigg Boss' dominates TRP; Sita Rama fell to the sixth position
ಕಿರುತೆರೆ8 months ago

Kannada Serials TRP: ಟಿಆರ್‌ಪಿಯಲ್ಲಿ ʻಬಿಗ್ ಬಾಸ್ʼದೇ ಮೇಲುಗೈ; 6ನೇ ಸ್ಥಾನಕ್ಕೆ ಕುಸಿದ ʻಸೀತಾ ರಾಮʼ

geetha serial Dhanush gowda engagement
ಕಿರುತೆರೆ6 months ago

Dhanush Gowda: ಗೀತಾ ಧಾರಾವಾಹಿ ನಟನ ನಿಶ್ಚಿತಾರ್ಥ; ಭವ್ಯಾಳ ಕಮೆಂಟ್‌ ಬಾಕ್ಸ್‌ ಆಫ್‌!

varun
ಕಿರುತೆರೆ7 months ago

Brindavana Serial: ʼಬೃಂದಾವನʼ ಧಾರಾವಾಹಿಯಲ್ಲಿ ದೊಡ್ಡ ಟ್ವಿಸ್ಟ್‌; ಪ್ರಮುಖ ಪಾತ್ರಧಾರಿಯೇ ಬದಲು

Kannada Serials
ಕಿರುತೆರೆ9 months ago

Kannada Serials TRP: ಟಿಆರ್‌ಪಿಯಲ್ಲಿ ಏರಿಕೆ ಕಂಡ ʻಅಮೃತಧಾರೆʼ; ʻಗಟ್ಟಿಮೇಳʼಕ್ಕೆ ನಾಲ್ಕನೇ ಸ್ಥಾನ!

Vijayanagara News
ವಿಜಯನಗರ3 hours ago

Vijayanagara News : ಕೆಲಸಕ್ಕೆ ಚಕ್ಕರ್, ಸಂಬಳಕ್ಕೆ ಹಾಜರ್! ಹಾರಕನಾಳು ಗ್ರಾಪಂ ಪಿಡಿಓಗಾಗಿ ಗ್ರಾಮಸ್ಥರ ಹುಡುಕಾಟ

Actor Darshan
ಯಾದಗಿರಿ1 day ago

Actor Darshan : ಬಾಸ್‌ ಅಂತ ಯಾಕ್‌ ಬಕೆಟ್‌ ಹಿಡಿಯುತ್ತೀರಾ ಅಂದವನಿಗೆ ದರ್ಶನ್ ಅಭಿಮಾನಿಯಿಂದ ಜೀವ ಬೆದರಿಕೆ!

Karnataka Weather Forecast
ಮಳೆ2 days ago

Karnataka Weather : ಕರಾವಳಿ, ಉತ್ತರ ಒಳನಾಡಿನಲ್ಲಿ ವರುಣಾರ್ಭಟ; ನಾಳೆಯು ಹಲವೆಡೆ ಸಿಕ್ಕಾಪಟ್ಟೆ ಮಳೆ

Actor Darshan
ಬೆಂಗಳೂರು2 days ago

Actor Darshan : ರೇಣುಕಾಸ್ವಾಮಿಯನ್ನು ಕಿಡ್ನ್ಯಾಪ್ ಮಾಡಿ ಕರೆತರುವ ದೃಶ್ಯ ಸಿಸಿ ಕ್ಯಾಮೆರಾದಲ್ಲಿ ಸೆರೆ!

actor Darshan
ಬೆಂಗಳೂರು2 days ago

Actor Darshan : ರೇಣುಕಾಸ್ವಾಮಿ ಕೊಲೆ ಕೇಸ್‌ನಲ್ಲಿ ಮತ್ತಿಬ್ಬರು ಸರೆಂಡರ್‌; ಆರೋಪಿಗಳ ಸಂಖ್ಯೆ 16ಕ್ಕೆ ಏರಿಕೆ

Actor Darshan
ಸಿನಿಮಾ2 days ago

Actor Darshan : ರೇಣುಕಾಸ್ವಾಮಿ ‌ಮೃತದೇಹ ಬಿಸಾಡಿ ಬಳಿಕ ಸಾಕ್ಷ್ಯಇದ್ದ 2 ಮೊಬೈಲ್‌ಗಳನ್ನು ಮೋರಿಗೆ ಎಸೆದ್ರಾ ಆರೋಪಿಗಳು?

karnataka weather Forecast
ಮಳೆ5 days ago

Karnataka Weather : ಭಾರಿ ಮಳೆಗೆ ಗುಡ್ಡದಿಂದ ಉರುಳಿ ಬಿದ್ದ ಬಂಡೆಗಲ್ಲು; ಬೆಂಗಳೂರಲ್ಲೂ ಸಂಜೆ ವರ್ಷಧಾರೆ

actor Darshan
ಚಿತ್ರದುರ್ಗ5 days ago

Actor Darshan: ರೇಣುಕಾ ಸ್ವಾಮಿ ಕೊಲೆ ಕೇಸ್‌ನಲ್ಲಿ ದರ್ಶನ್‌ ಅರೆಸ್ಟ್‌; ಪ್ರಕರಣವನ್ನು ಸಿಬಿಐಗೆ ವಹಿಸಲು ಒತ್ತಾಯ

Actor Darshan gets a series of questions from the police
ಸಿನಿಮಾ5 days ago

Actor Darshan : ಪವಿತ್ರಗೌಡ ಬಗ್ಗೆ ಪೋಸ್ಟ್‌ ಮಾಡಿದ್ರೆ ನಿಮಗ್ಯಾಕೆ ಕೋಪ? ದರ್ಶನ್‌ಗೆ ಪೊಲೀಸರ ಪ್ರಶ್ನೆಗಳ ಸುರಿಮಳೆ

Actor Darshan
ಸಿನಿಮಾ5 days ago

Actor Darshan : ದರ್ಶನ್‌ ಜೈಲಿಗೆ ಹೋಗುತ್ತಿರುವುದು ಇದೇ ಮೊದಲಲ್ಲ; ನಟನ ಮೇಲಿವೆ ಹತ್ತಾರು ಕೇಸ್‌ಗಳು!

ಟ್ರೆಂಡಿಂಗ್‌