Rain News : ಮಳೆಯಬ್ಬರಕ್ಕೆ ಹಲವೆಡೆ ಗುಡ್ಡ, ಮನೆ ಕುಸಿತ; ಅವಘಡಕ್ಕೆ ಮೂವರ ಸಾವು - Vistara News

ಉಡುಪಿ

Rain News : ಮಳೆಯಬ್ಬರಕ್ಕೆ ಹಲವೆಡೆ ಗುಡ್ಡ, ಮನೆ ಕುಸಿತ; ಅವಘಡಕ್ಕೆ ಮೂವರ ಸಾವು

Rain News : ರಾಜ್ಯದ ಹಲವು ಕಡೆ ಭಾರಿ ಮಳೆಯಾಗುತ್ತಿದೆ. ಹಾಗೇ ಅವಘಡಗಳೂ ಹೆಚ್ಚುತ್ತಿವೆ. ಮಂಗಳವಾರ ರಾತ್ರಿಯಿಂದ ಸುರಿದ ಮಳೆಗೆ ಒಟ್ಟು ಮೂವರು ಬಲಿಯಾಗಿದ್ದಾರೆ. ಕೆಲವು ಕಡೆ ಗುಡ್ಡ, ಮನೆಗಳು ಕುಸಿದಿವೆ. ಆತಂಕದ ಛಾಯೆ ನಿರ್ಮಾಣವಾಗಿದೆ.

VISTARANEWS.COM


on

Ullala beach rain effect
ಮಹತ್ವದ, ಕುತೂಹಲಕರ ಸುದ್ದಿಗಾಗಿ ಫಾಲೊ ಮಾಡಿ
Koo

ಬೆಂಗಳೂರು: ರಾಜ್ಯದಲ್ಲಿ ಜೂನ್‌ ತಿಂಗಳು ಮಳೆಯಿಲ್ಲದೆ ಆತಂಕಕ್ಕೊಳಗಾಗಿದ್ದ ಕರ್ನಾಟಕದಲ್ಲಿ ಈಗ ವರುಣ ವಿಜೃಂಭಿಸುತ್ತಿದ್ದಾನೆ. ಬಹುತೇಕ ಎಲ್ಲ ಜಿಲ್ಲೆಗಳಲ್ಲಿ ಧಾರಾಕಾರವಾಗಿ ಮಳೆಯಾಗುತ್ತಿದೆ. ಜತೆ ಬಿರುಗಾಳಿಯೂ ಬೀಸತೊಡಗಿದೆ. ಈ ಮಧ್ಯೆ ಮಳೆಗೆ (Rain News) ಅಲ್ಲಲ್ಲಿ ಗುಡ್ಡ ಕುಸಿತ, ಮನೆ ಕುಸಿತದಂತಹ ಪ್ರಕರಣಗಳು ಕೇಳಿಬಂದಿವೆ. ಇನ್ನು ನೀರಿನ ಸೆಳೆತಕ್ಕೆ ಸಿಲುಕಿ ಕೊಚ್ಚಿಹೋಗುವುದು, ಮಳೆ ಅವಘಡಗಳಿಂದ ಮೃತಪಡುತ್ತಿರುವ ಪ್ರಕರಣಗಳೂ ಹೆಚ್ಚುತ್ತಿವೆ. ಈ ಹಿನ್ನೆಲೆಯಲ್ಲಿ ಎಚ್ಚರಿಕೆ ಇರಲಿ ಎಂದು ಹವಾಮಾನ ಇಲಾಖೆ ಹೇಳಿದೆ. ಈಗ ಉತ್ತರ ಕನ್ನಡ ಜಿಲ್ಲೆಯ ಕಾರವಾರ ತಾಲೂಕಿನ ಪೋಸ್ಟ್ ಚೆಂಡಿಯಾದಲ್ಲಿ ಗುಡ್ಡ ಕುಸಿತವಾಗಿದ್ದರೆ, ದಕ್ಷಿಣ ಕನ್ನಡ ಜಿಲ್ಲೆಯ ಮಂಗಳೂರು ಹೊರವಲಯದ ಉಳ್ಳಾಲದ ಕೋಟೆಪುರ ಬಳಿಯ ಮನೆಯೊಂದರ ಗೋಡೆ ಕುಸಿದಿದೆ. ಉಡುಪಿ ಜಿಲ್ಲೆಯಲ್ಲಿ ಪ್ರತ್ಯೇಕ ಕಡೆ ನೀರಿಗೆ ಬಿದ್ದು ಇಬ್ಬರು ಮೃತಪಟ್ಟಿದ್ದಾರೆ. ತುಂಗಾ ಜಲಾಶಯ ಸಹ ತುಂಬುವ ಮಟ್ಟಕ್ಕೆ ಬಂದಿದೆ.

ಕಾರವಾರದಲ್ಲಿ ನೌಕಾನೆಲೆ ರಸ್ತೆ ಕಾಮಗಾರಿಯಿಂದ ಗುಡ್ಡ ಕುಸಿತ

ಕಾರವಾರ: ಧಾರಾಕಾರ ಮಳೆ ಹಿನ್ನೆಲೆಯಲ್ಲಿ ಕಾರವಾರ ತಾಲೂಕಿನ ಪೋಸ್ಟ್ ಚಂಡಿಯಾದಲ್ಲಿ ಗುಡ್ಡ ಕುಸಿತವಾಗಿದೆ. ನೌಕಾನೆಲೆ ರಸ್ತೆ ಕಾಮಗಾರಿಯಿಂದ ಗುಡ್ಡ ಕುಸಿತ ಆಗಿದೆ ಎನ್ನಲಾಗಿದೆ. ಈಗ ಮನೆಗಳ ಮೇಲೆ ಗುಡ್ಡದ ಮಣ್ಣು ಕುಸಿಯುವ ಆತಂಕದಲ್ಲಿ ಜನರಿದ್ದಾರೆ. ನೌಕಾನೆಲೆಯಿಂದ ಆಮದಳ್ಳಿ ಸಂಪರ್ಕಕ್ಕೆ ರಸ್ತೆ ನಿರ್ಮಿಸಲಾಗುತ್ತಿರುವ ಹಿನ್ನೆಲೆಯಲ್ಲಿ ಈ ಸಮಸ್ಯೆ ಎದುರಾಗಿದೆ.

Land slide in Karwar post chandiya
ಕಾರವಾರ ತಾಲೂಕಿನ ಪೋಸ್ಟ್ ಚಂಡಿಯಾದಲ್ಲಿ ಗುಡ್ಡ ಕುಸಿತ

ಇದನ್ನೂ ಓದಿ: Hottest June: 122 ವರ್ಷಗಳಲ್ಲೇ ಈ ವರ್ಷದ ಜೂನ್‌ ಅತ್ಯಂತ ಬಿಸಿ, ಅತೀ ಕಡಿಮೆ ಮಳೆ!

ಪೋಸ್ಟ್ ಚೆಂಡಿಯಾ ಬಳಿ ಗುಡ್ಡ ಕೊರೆದು ರಸ್ತೆ ನಿರ್ಮಾಣ ಕಾಮಗಾರಿ ಮಾಡಲಾಗುತ್ತಿತ್ತು. ರಸ್ತೆ ನಿರ್ಮಾಣದ ವೇಳೆ ಮೇಲ್ಭಾಗದಲ್ಲಿ ಭಾರೀ ಪ್ರಮಾಣದಲ್ಲಿ ಗುಡ್ಡ ಕುಸಿತವಾಗಿದೆ. ಗುಡ್ಡಕ್ಕೆ ಹೊಂದಿಕೊಂಡೇ ಕೆಳಭಾಗದಲ್ಲಿ ಏಳು ಮನೆಗಳು ಇದ್ದು, ಮಣ್ಣು ಕುಸಿಯುವ ಆತಂಕದಲ್ಲಿ ಜನರಿದ್ದಾರೆ.

ಸ್ಥಳಕ್ಕೆ ಚೆಂಡಿಯಾ ಪಿಡಿಒ ಹಾಗೂ ಪಂಚಾಯತ್ ಸದಸ್ಯರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಮುಂಜಾಗ್ರತಾ ಕ್ರಮವಾಗಿ ಸ್ಥಳೀಯರನ್ನು ಬೇರೆಡೆ ಸ್ಥಳಾಂತರ ಮಾಡುವಂತೆ ಅಧಿಕಾರಿಗಳು ಮನವಿ ಮಾಡಿದ್ದಾರೆ. ಜನರ ವಿರೋಧದ ನಡುವೆಯೂ ರಸ್ತೆ ನಿರ್ಮಾಣಕ್ಕೆ ನೌಕಾನೆಲೆ ಮುಂದಾಗಿರುವುದು ಆಕ್ರೋಶಕ್ಕೆ ಕಾರಣವಾಗಿದೆ. ಈಗ ಗ್ರಾಮಸ್ಥರು ಮನೆ, ಆಸ್ತಿ-ಪಾಸ್ತಿ ಕಳೆದುಕೊಳ್ಳುವ ಭೀತಿಯಲ್ಲಿದ್ದಾರೆ.

house wall collapsed in ullala kotepura
ಕೋಟೆಪುರ ಬಳಿ ಭಾರಿ ಮಳೆಗೆ ಮನೆ ಗೋಡೆ ಕುಸಿತವಾಗಿರುವುದು

ಮನೆ ಗೋಡೆ ಕುಸಿತ; ಮನೆಯವರು ಪಾರು

ಮಂಗಳೂರು: ಹೊರವಲಯದ ಉಳ್ಳಾಲದ ಕೋಟೆಪುರ ಬಳಿ ಭಾರಿ ಮಳೆಗೆ ಮನೆ ಗೋಡೆ ಕುಸಿತವಾಗಿದ್ದು, ಮನೆ ಮಂದಿ ಪಾರಾಗಿದ್ದಾರೆ. ಈ ವೇಳೆ ಎಲ್ಲರೂ ಮನೆಯೊಳಗಿದ್ದರು. ರುಕಿಯ- ಉಮರಬ್ಬ ದಂಪತಿಗೆ ಸೇರಿದ ಮನೆ ಇದಾಗಿದೆ. ಗೋಡೆ ಕುಸಿಯುತ್ತಿದ್ದಂತೆ ಮನೆಯಲ್ಲಿದ್ದವರೆಲ್ಲರೂ ಹೊರಗೆ ಓಡಿ ಬಂದಿದ್ದಾರೆ. ಘಟನಾ ಸ್ಥಳಕ್ಕೆ ನಗರಸಭೆ ಅಧಿಕಾರಿಗಳು ಭೇಟಿ ನೀಡಿ ಮಾಹಿತಿ ಸಂಗ್ರಹಿಸಿದ್ದಾರೆ.

ಉಡುಪಿಯಲ್ಲಿ ಇಬ್ಬರು ಬಲಿ

ಉಡುಪಿ: ಮುಂಗಾರು ಮಳೆಗೆ ಉಡುಪಿ ಜಿಲ್ಲೆಯಲ್ಲಿ ಇಬ್ಬರು ಬಲಿಯಾಗಿದ್ದಾರೆ. ಕುಂದಾಪುರ ತಾಲೂಕು ತೆಕ್ಕಟ್ಟೆಯ ಮಲ್ಯಾಡಿ ಸಮೀಪ ಮಂಗಳವಾರ ರಾತ್ರಿ ಸ್ಕೂಟರ್‌ ಚಲಾಯಿಸುವಾಗ ನಿಯಂತ್ರಣ ತಪ್ಪಿ ಕೆರೆಗೆ ಬಿದ್ದು ಮೃತಪಟ್ಟಿದ್ದಾರೆ. ದಿವಾಕರ್ ಶೆಟ್ಟಿ ಮೃತ ದುರ್ದೈವಿ. ಅವರು ರಾತ್ರಿ ಹೋಟೆಲ್‌ನಿಂದ ಕೆಲಸ ಮುಗಿಸಿ ಮನೆಗೆ ತೆರಳುತ್ತಿದ್ದಾಗ ಈ ಘಟನೆ ನಡೆದಿದೆ. ಶವವನ್ನು ಮೇಲಕ್ಕೆತ್ತಲಾಗಿದ್ದು, ಕೋಟ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

sheshadri Aithal fall in kubja river
ಮೃತ ಕಮಲಶಿಲೆ ಶೇಷಾದ್ರಿ ಐತಾಳ್. ಅವರ ಶವಕ್ಕಾಗಿ ಹುಡುಕಾಟ

ಕುಬ್ಜಾ ನದಿಗೆ ಬಿದ್ದು ಸಾವು

ಕಮಲಶಿಲೆ ದೇವಳದ ಪಕ್ಕದಲ್ಲಿ ಹರಿಯುವ ಕುಬ್ಜಾ ನದಿಗೆ ಬಿದ್ದು, ಕಮಲಶಿಲೆ ಶೇಷಾದ್ರಿ ಐತಾಳ್ ( 75) ಎಂಬುವವರು ಮೃತಪಟ್ಟಿದ್ದಾರೆ. ಕಮಲಶಿಲೆ ಸಮೀಪದ ತಪ್ಪಲು ನಿವಾಸಿಯಾಗಿರುವ ಇವರು, ಅಲ್ಲಿನ ದೇವಳಕ್ಕೆ ಪೂಜೆಗೆ ಆಗಮಿಸಿದ್ದರು. ನದಿಗೆ ಬಿದ್ದ ಜಾಗದ ಸುಮಾರು ನೂರು ಮೀಟರ್ ದೂರದಲ್ಲಿ ಶವ ಪತ್ತೆಯಾಗಿದೆ. ಕೊಲ್ಲೂರು ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Rain Effect power linecut in suratkal
ಕುಳಾಯಿಯಲ್ಲಿ ಕಡಿದು ಬಿದ್ದ ವಿದ್ಯುತ್ ತಂತಿ ಕೆಳಗೆ ಬಿದ್ದಿರುವುದು

ವಿದ್ಯುತ್ ತಂತಿ ತುಳಿದು ಯುವಕ ಸಾವು

ಮಂಗಳೂರು: ಮಂಗಳೂರು ಹೊರವಲಯದ ಸುರತ್ಕಲ್ ಬಳಿಯ ಕುಳಾಯಿಯಲ್ಲಿ ಕಡಿದು ಬಿದ್ದ ವಿದ್ಯುತ್ ತಂತಿ ತುಳಿದು ಯುವಕನೊಬ್ಬ ಮೃತಪಟ್ಟಿದ್ದಾನೆ. ಕುಷ್ಟಗಿ ಮೂಲದ ಸಂತೋಷ್ (28) ಮೃತ ಯುವಕ. ರಾತ್ರಿ ವೇಳೆ ಬಿರುಗಾಳಿಗೆ ವಿದ್ಯುತ್ ತಂತಿ ಕಡಿದು ರಸ್ತೆಗೆ ಬಿದ್ದಿತ್ತು. ಬುಧವಾರ ಬೆಳಗ್ಗೆ ಕೆಲಸಕ್ಕೆ ಹೋಗುತ್ತಿದ್ದಾಗ ವಿದ್ಯುತ್ ತಂತಿ ತುಳಿದಿದ್ದರಿಂದ ವಿದ್ಯುತ್ ಪ್ರವಹಿಸಿ ಸ್ಥಳದಲ್ಲೇ ಮೃತಪಟ್ಟಿದ್ದಾನೆ. ಬಾಡಿಗೆ ಮನೆಯಲ್ಲಿದ್ದು ಕೈಗಾರಿಕಾ ಸಂಕೀರ್ಣಕ್ಕೆ ಸಂತೋಷ್ ಕೆಲಸಕ್ಕೆ ತೆರಳುತ್ತಿದ್ದ ಎನ್ನಲಾಗಿದೆ.

ಮನೆ ಮೇಲೆ ಉರುಳಿದ ಮರಗಳು

ಮಂಗಳೂರು: ಮಂಗಳೂರು ಹೊರವಲಯದ ಸೋಮೇಶ್ವರ ಬಳಿ ಭಾರಿ ಗಾಳಿ, ಮಳೆಗೆ ಮನೆ ಮೇಲೆ ಮರಗಳು ಉರುಳಿವೆ. ಇದರಿಂದ ನಾಲ್ಕು ಮನೆಗಳು ಹಾಗೂ ವಾಹನಗಳಿಗೆ ಹಾನಿಯಾಗಿವೆ. ಸೋಮೇಶ್ವರ ಪುರಸಭೆ ವ್ಯಾಪ್ತಿಯ ಪೆರಿಬೈಲ್, ಕುಂಪಲ ಬಾರ್ದೆ, ಅಂಚಿಕಟ್ಟೆ ಪ್ರದೇಶದಲ್ಲಿ ನಾಲ್ಕು ಮನೆಗಳಿಗೆ ಮರಗಳು ಉರುಳಿ ಬಿದ್ದು ಹಾನಿಯಾಗಿದೆ. ಒಂದು ಸ್ಕೂಟರ್ ಮರದಡಿ ಸಿಲುಕಿ ನುಜ್ಜುಗುಜ್ಜಾಗಿದೆ. ಪೆರಿಬೈಲ್ ಎಂಬಲ್ಲಿನ ಅಬ್ಬಾಸ್, ಕುಂಪಲ ಬಾರ್ದೆಯ ಯಮುನಾ ಬಂಗೇರ, ಸುನಿಲ್ ಹಾಗೂ ಅಂಚಿಕಟ್ಟೆಯ ಯು.ಎ ಹಸೈನಾರ್, ಯು.ಎ.ಖಾದರ್ ಎಂಬುವವರ ಮನೆಗಳಿಗೆ ಹಾನಿಯಾಗಿದೆ. ಯು.ಎ.ಖಾದರ್ ಅವರಿಗೆ ಸೇರಿದ ಸ್ಕೂಟರ್‌ಗೂ ಹಾನಿಯಾಗಿದೆ.

ಕಡಲ್ಕೊರೆತಕ್ಕೆ ಚುರುಮುರಿ ಅಂಗಡಿ ಸಮುದ್ರಪಾಲು; 80 ಕಿ.ಮೀ ವೇಗದಲ್ಲಿ ಬೀಸುತ್ತಿರುವ ಗಾಳಿ

ಉಳ್ಳಾಲ: ಉಳ್ಳಾಲ ಹಾಗೂ ಉಚ್ಚಿಲ ಭಾಗದಲ್ಲಿ ಕಡಲ್ಕೊರೆತ ತೀವ್ರಗೊಂಡಿದ್ದು, ಉಳ್ಳಾಲ ಬೀಚ್ ಬಳಿ ಹಾಕಲಾಗಿದ್ದ ಚುರುಮುರಿ ಅಂಗಡಿಗಳು ಸಮುದ್ರಪಾಲಾಗಿವೆ. ಉಚ್ಚಿಲ ಭಾಗದಲ್ಲಿ ಸಮುದ್ರತೀರದ ಮನೆಗಳಿಗೆ ಅಪ್ಪಳಿಸಿವೆ. ಅಲ್ಲದೆ, ಇಲ್ಲಿ ಹಲವು ಮರಗಳನ್ನು ಸಮುದ್ರವು ಆಪೋಶನ ತಗೆದುಕೊಂಡಿದೆ. ಸಮುದ್ರತೀರದಲ್ಲಿ 80 ಕಿ.ಮೀ ವೇಗದಲ್ಲಿ ಗಾಳಿ ಬೀಸುತ್ತಿರುವುದರಿಂದ ಭಾರಿ ಗಾತ್ರದ ಅಲೆಗಳು ತೀರಕ್ಕೆ ಅಪ್ಪಳಿಸುತ್ತಿವೆ.

ullala beach churumuri shop

ಉಳ್ಳಾಲ ಬೀಚ್, ಮೊಗವೀರಪಟ್ಣ, ಸುಭಾಷನಗರ, ಕೈಕೋ, ಕಿಲೆರಿಯಾನಗರ, ಸೋಮೇಶ್ವರ, ಉಚ್ಚಿಲ, ಬಟ್ಟಪ್ಪಾಡಿ ತೀರಗಳಲ್ಲಿ ಸಮುದ್ರ ತೀರಕ್ಕೆ ಬೃಹತ್ ಗಾತ್ರದ ಅಲೆಗಳು ಅಪ್ಪಳಿಸುತ್ತಿವೆ. ಬ್ರೇಕ್ ವಾಟರ್ ಹಾಕಿದ ನಂತರ ಮೊಗವೀರಪಟ್ಣ ತೀರದಲ್ಲಿ ಕಡಲ್ಕೊರೆತ ಕಡಿಮೆಯಾಗಿತ್ತು. ಆದರೆ, ಬುಧವಾರ ಭಾರಿ ವೇಗವಾಗಿ ಗಾಳಿ ಬೀಸುತ್ತಿದ್ದು, ಮೊಗವೀರಪಟ್ಣ, ಉಳ್ಳಾಲ ಬೀಚ್ ಸಮೀಪ ಅಲೆಗಳ ಅಬ್ಬರ ಹೆಚ್ಚಾಗಿದೆ. ಈ ಕಾರಣಕ್ಕೆ ಬೀಚ್ ಬದಿಯಲ್ಲಿದ್ದ ಚುರುಮುರಿ ಅಂಗಡಿಗಳು ಸಮುದ್ರಪಾಲಾಗಿವೆ. ಉಚ್ಚಿಲ , ಬಟ್ಟಂಪಾಡಿ ಸಮುದ್ರ ತೀರದಲ್ಲಿ 80 ಕಿ.ಮೀ ವೇಗದಲ್ಲಿ ಗಾಳಿ ಬೀಸಲಾರಂಭಿಸಿದ್ದು, ಸಮುದ್ರ ತೀರದಲ್ಲಿ ನಿಲ್ಲಲೂ ಕಷ್ಟಪಡಬೇಕಿದೆ.

ಇದನ್ನೂ ಓದಿ: Weather Report : ನಾಳೆ ಬೆಂಗಳೂರಲ್ಲಿ ವರುಣಾರ್ಭಟ; ದಕ್ಷಿಣ-ಉತ್ತರ ಒಳನಾಡು, ಕರಾವಳಿಯಲ್ಲಿ ಮಳೆ ಹಾವಳಿ

Car accrident near kumta due to rain

ನಿಯಂತ್ರಣ ತಪ್ಪಿ ಪಲ್ಟಿಯಾದ ಕಾರು

ಉತ್ತರ ಕನ್ನಡ ಜಿಲ್ಲೆಯಲ್ಲಿ ಭಾರಿ ಮಳೆ ಮುಂದುವರಿದಿದ್ದು, ಕುಮಟಾ ರಾಷ್ಟ್ರೀಯ ಹೆದ್ದಾರಿ 66ರ ಬರ್ಗಿ ಗ್ರಾಮದ ಬಳಿ ಮಳೆಯ ಅಬ್ಬರಕ್ಕೆ ಚಾಲಕನ ನಿಯಂತ್ರಣ ತಪ್ಪಿ ಕಾರು ಪಲ್ಟಿಯಾಗಿದೆ. ಕುಮಟಾದಿಂದ ಅಂಕೋಲಾ ಕಡೆ ಕಾರು ಹೊರಟಿತ್ತು. ರಸ್ತೆಯಲ್ಲಿ ಮಳೆ ನೀರು ಹರಿಯುತ್ತಿದ್ದರಿಂದ ಜತೆಗೆ ವೇಗವಾಗಿ ಚಲಾಯಿಸಿದ ಪರಿಣಾಮ ನಿಯಂತ್ರಣ ತಪ್ಪಿದ್ದು, ಪಕ್ಕದ ಕಾಲುವೆಗೆ ಬಿದ್ದಿದೆ. ಕಾರಿನಲ್ಲಿದ್ದವರು ಪ್ರಾಣಾಪಾಯದಿಂದ ಪಾರಾಗಿದ್ದಾರೆ. ಕುಮಟಾ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಪ್ರಕರಣ ದಾಖಲಾಗಿದೆ.

Tunga river in shivamogga

ಭರ್ತಿಯತ್ತ ತುಂಗಾ ಜಲಾಶಯ

ಶಿವಮೊಗ್ಗ: ಮಲೆನಾಡಿನಲ್ಲಿ ಕಳೆದೆರಡು ದಿನಗಳಿಂದ ಮಳೆ ಚುರುಕುಗೊಂಡಿದ್ದು, ಎಲ್ಲ ಕಡೆ ವ್ಯಾಪಕವಾಗಿ ಸುರಿಯುತ್ತಿದೆ. ತುಂಗಾ ಜಲಾಶಯದಲ್ಲಿ ಪೂರ್ಣ ಮಟ್ಟಕ್ಕೆ ನೀರು ಸಂಗ್ರಹವಾಗಿದೆ. ಮಳೆ ಹೀಗೇ ಮುಂದುವರಿದಲ್ಲಿ ಯಾವುದೇ ಕ್ಷಣದಲ್ಲಿ ನೀರು ಬಿಡುವ ಸಾಧ್ಯತೆ ಇದೆ. ಒಟ್ಟಾರೆ ಸಾಮರ್ಥ್ಯ 588.24 ಮೀಟರ್‌ ಇದ್ದು, ಬುಧವಾರ (ಜುಲೈ 7) 587.54 ಮೀಟರ್‌ ಇದೆ. ಅಂದರೆ ಜಲಾಶಯ ತುಂಬಲು ಇನ್ನು ಭಾಗಶಃ ಮುಕ್ಕಾಲು ಮೀಟರ್‌ ನೀರು ಬಂದರೆ ಸಾಕು. ಹೀಗಾಗಿ ತುಂಗಾ ಮೇಲ್ದಂಡೆ ಯೋಜನೆ ವಿಭಾಗವು ಮುನ್ನೆಚ್ಚರಿಕೆ ನೀಡಿದ್ದು, ನದಿಪಾತ್ರದಲ್ಲಿ ಯಾವುದೇ ಚಟುವಟಿಕೆಯನ್ನು ಮಾಡದಂತೆ ಎಚ್ಚರಿಕೆ ನೀಡಿದೆ. ದನ-ಕರುಗಳನ್ನು, ಪ್ರಾಣಿಗಳನ್ನು ಮೇಯಲು ಬಿಡಬಾರದು, ಅಪಾಯದ ಸ್ಥಳದಲ್ಲಿದ್ದವರು ಸುರಕ್ಷಿತ ಸ್ಥಳಗಳಿಗೆ ತೆರಳುವಂತೆ ಮುನ್ನೆಚ್ಚರಿಕೆ ನೀಡಲಾಗಿದೆ.

ಮುಳುಗಿದ ಬೋಟ್‌; ಯುವಕನ ರಕ್ಷಣೆ

ಮಂಗಳೂರು: ನೇತ್ರಾವತಿ ನದಿಯಲ್ಲಿ ಮೀನುಗಾರಿಕೆಗೆ ಬೋಟ್‌ನಲ್ಲಿ ಹೋಗಿದ್ದ ಯುವಕನನ್ನು ರಕ್ಷಣೆ ಮಾಡಲಾಗಿದೆ. ನೀರಿನ ಹರಿವು ಜಾಸ್ತಿಯಾಗಿ ಬೋಟ್‌ ಮಗುಚಿದ್ದ ಹಿನ್ನೆಲೆಯಲ್ಲಿ ತೇಲಿಕೊಂಡು ಹೋಗುತ್ತಿದ್ದ ಯುವಕನನ್ನು ಸಿನಿಮೀಯವಾಗಿ ರಕ್ಷಿಸಲಾಗಿದೆ. ಸ್ಥಳೀಯ ಯುವಕರ ತಂಡವು ಸಮಯಪ್ರಜ್ಞೆ ಮೆರೆದು ಯುವಕನನ್ನು ರಕ್ಷಣೆ ಮಾಡಿದ್ದಾರೆ.

boat fall in netravati river at harekala

ಮಂಗಳೂರು ಹೊರವಲಯದ ಹರೇಕಳ- ಅಡ್ಯಾರ್ ಸೇತುವೆಯ ಕೆಳಭಾಗ ಈ ಘಟನೆ ನಡೆದಿದೆ. ರೆಡ್ ಅಲರ್ಟ್ ನಡುವೆಯೂ ಅಪಾಯ ಲೆಕ್ಕಿಸದೆ ಮೀನುಗಾರಿಕೆಗೆ ಹೋಗಿದ್ದ ಯುವಕನ ಜೀವ ಅಪಾಯಕ್ಕೆ ಸಿಲುಕಿತ್ತು. ಮೀನುಗಾರಿಕಾ ಬೋಟ್ ಮುಳುಗಡೆ ಆಗಿಯೇ ಬಿಟ್ಟಿತ್ತು. ನೀರು ಸಹ ವೇಗವಾಗಿ ಹರಿದುಕೊಂಡು ಹೋಗುತ್ತಿದ್ದರಿಂದ ಆತನಿಗೆ ಈಜಿ ದಡ ಸೇರಲು ಆಗುತ್ತಲೇ ಇರಲಿಲ್ಲ. ಹೀಗಾಗಿ ರಕ್ಷಣೆಗೆ ಕೂಗಿಕೊಳ್ಳುತ್ತಿದ್ದ.

ಇದನ್ನೂ ಓದಿ: Rain News : ಹೊಸನಗರದ ಮಾಣಿಯಲ್ಲಿ ಒಂದೇ ದಿನ 14 ಸೆಂ.ಮೀ. ಮಳೆ! ತುಂಬಿತು ತುಂಗಾ ಜಲಾಶಯ

ಇದನ್ನು ಗಮನಿಸಿದ ಸ್ಥಳದಲ್ಲಿದ್ದ ಯುವಕರ ತಂಡವು ಸೇತುವೆ ಮೇಲಿನಿಂದ ನದಿಗೆ ಹಗ್ಗ ಇಳಿಸಿದ್ದಾರೆ. ಆ ಹಗ್ಗವನ್ನು ಯುವಕನು ಹಿಡಿದುಕೊಂಡು ಮೇಲಕ್ಕೆ ಬಂದಿದ್ದಾನೆ. ದೋಣಿ ನೀರುಪಾಲಾಗಿದ್ದು, ರಕ್ಷಣೆಯ ವಿಡಿಯೊ ವೈರಲ್ ಆಗಿದೆ.

ಕ್ಷಣ ಕ್ಷಣದ ಮಾಹಿತಿಗಾಗಿ Vistara News FaceBook ಪೇಜ್ ಫಾಲೋ ಮಾಡಿ
ಮಹತ್ವದ ಮಾಹಿತಿಗಾಗಿ ವಿಸ್ತಾರ ನ್ಯೂಸ್ ಆ್ಯಪ್ ಉಚಿತವಾಗಿ ಡೌನ್ ಲೋಡ್ ಮಾಡಿಕೊಳ್ಳಿ: Andriod App | IOS App

ಮಳೆ

Karnataka Weather : ಚಿಕ್ಕಮಗಳೂರಲ್ಲಿ ಭಾರಿ ಮಳೆ; ಯಾದಗಿರಿಯಲ್ಲಿ ಕರೆಂಟ್‌ ಕಟ್‌, ಜನರೇಟರ್‌ನಿಂದ ಮೊಬೈಲ್‌ಗಳಿಗೆ ಚಾರ್ಜಿಂಗ್‌!

Rain News : ರಾಜ್ಯದಲ್ಲಿ ಮಳೆ ಅಬ್ಬರ ಮುಂದುವರಿದಿದೆ. ಯಾದಗಿರಿಯಲ್ಲಿ ಗಾಳಿ ಸಹಿತ ಮಳೆಗೆ ವಿದ್ಯುತ್‌ ಕಂಬ ಮುರಿದು ಬಿದ್ದ ಪರಿಣಾಮ ಮೂರು ದಿನದಿಂದ ಕರೆಂಟ್‌ ಕಟ್‌ ಆಗಿದೆ. ಇತ್ತ ಗ್ರಾಮಸ್ಥರು ಜನರೇಟರ್‌ನಿಂದ ಮೊಬೈಲ್‌ಗಳಿಗೆ ಚಾರ್ಜಿಂಗ್‌ (Karnataka Weather Forecast) ಮಾಡಿಕೊಳ್ಳುತ್ತಿದ್ದಾರೆ.

VISTARANEWS.COM


on

By

Karnataka weather Forecast
Koo

ಚಿಕ್ಕಮಗಳೂರು/ಯಾದಗಿರಿ: ರಾಜ್ಯದ ಹಲವೆಡೆ ಮಳೆ ಪ್ರಮಾಣ ತಗ್ಗಿದ್ದರೂ ಮಳೆ ಅವಾಂತರ (Rain News) ಮಾತ್ರ ಕಡಿಮೆ ಆಗುತ್ತಿಲ್ಲ. ಯಾದಗಿರಿಯಲ್ಲಿ ಮಳೆಗೆ ವಿದ್ಯುತ್‌ ಕಂಬಗಳು ಧರೆಗುರುಳಿವೆ. ಪರಿಣಾಮ ಮೂರು ದಿನಗಳಿಂದ ಕರೆಂಟ್‌ ಇಲ್ಲದಂತಾಗಿದೆ.ಇತ್ತ ಮಂಗಳವಾರ ಚಿಕ್ಕಮಗಳೂರಿನಲ್ಲಿ ಭಾರಿ (Karnataka weather Forecast) ಮಳೆಯಾಗುತ್ತಿದೆ.

ಒಂದು ಗಂಟೆಯಿಂದ ಧಾರಾಕಾರ ಮಳೆ ಸುರಿದಿದೆ. ಕೊಟ್ಟಿಗೆಹಾರ, ಬಾಳೂರು, ಚಾರ್ಮಾಡಿ ಸುತ್ತಮುತ್ತ ನಿರಂತರ ಮಳೆಯಿಂದಾಗಿ ವಾಹನ ಸವಾರರು ಪರದಾಡಬೇಕಾಯಿತು. ಕಳೆದ ಎರಡು ದಿನಗಳಿಂದ ಬಿಡುವು ನೀಡಿದ್ದ ಮಳೆ ಮತ್ತೆ ಆರ್ಭಟಿಸುತ್ತಿದೆ. ಭಾರಿ ಗಾಳಿಯೊಂದಿಗೆ ಮಳೆ ಸುರಿಯುತ್ತಿದ್ದು, ಸವಾರರು ರಸ್ತೆ ಬದಿ ವಾಹನ ನಿಲ್ಲಿಸಿ ಬಸ್‌ ನಿಲ್ದಾಣದಲ್ಲಿ ಆಶ್ರಯ ಪಡೆದರು.

ಯಾದಗಿರಿಯಲ್ಲಿ ಮಳೆಗೆ ಪವರ್‌ ಕಟ್‌; ಜನರೇಟರ್ ಮೂಲಕ ಮೊಬೈಲ್‌ಗಳಿಗೆ ಚಾರ್ಜಿಂಗ್‌

ಬಿರುಗಾಳಿ ಸಹಿತ ಸುರಿದ ಭಾರಿ ಮಳೆಗೆ ವಿದ್ಯುತ್ ಕಂಬ ಬಿದ್ದಿದ್ದು, ಮೂರು ದಿನಗಳಿಂದ ವಿದ್ಯುತ್ ಕಡಿತಗೊಂಡಿದೆ. ಯಾದಗಿರಿ ಜಿಲ್ಲೆಯ ಶಹಾಪುರ ತಾಲೂಕಿನ ಬಲಕಲ್, ಮರಮಕಲ್, ನಾಲ್ವಡಗಿ ಗ್ರಾಮಸ್ಥರು ವಿದ್ಯುತ್‌ ಇಲ್ಲದೆ ಪರದಾಡುತ್ತಿದ್ದಾರೆ. ತುರ್ತು ಎಂದಾಗ ಫೋನ್‌ ಮಾಡಲು ಮೊಬೈಲ್‌ನಲ್ಲಿ ಚಾರ್ಜಿಂಗ್‌ ಇಲ್ಲ.

ಹೀಗಾಗಿ ಮೊಬೈಲ್‌ ಚಾರ್ಜಿಂಗ್‌ಗಾಗಿ ಗ್ರಾಮಸ್ಥರು ಸೂಪರ್‌ ಪ್ಲ್ಯಾನ್‌ವೊಂದನ್ನು ಮಾಡಿಕೊಂಡಿದ್ದಾರೆ. ಜನರೇಟರ್ ಮೂಲಕ ಹತ್ತಾರು ಪವರ್ ಬಾಕ್ಸ್ ಇಟ್ಟು ವಿದ್ಯುತ್ ಕನೆಕ್ಷನ್ ಮಾಡಿಕೊಂಡಿದ್ದಾರೆ. ಜನರೇಟರ್ ಮೂಲಕ‌ ಮೊಬೈಲ್ ಜಾರ್ಜ್ ಮಾಡಲು ಪಾಳಿ ವ್ಯವಸ್ಥೆ ಮಾಡಲಾಗಿದೆ. ಮರಮಕಲ್ ಗ್ರಾಮದ ಬಸವೇಶ್ವರ ಮಂದಿರದಲ್ಲಿ ಮೊಬೈಲ್ ಚಾರ್ಜಿಂಗ್‌ ಮಾಡಿಕೊಳ್ಳಲು ವ್ಯವಸ್ಥೆ ಮಾಡಿಕೊಂಡಿದ್ದಾರೆ.

ಮೂರು ದಿನಗಳಿಂದ ವಿದ್ಯುತ್ ಸಮಸ್ಯೆ ತಲೆದೊರಿದ್ದು, ಜನರೇಟರ್ ಮೂಲಕವೇ ಕುಡಿಯುವ ನೀರಿನ ಪೂರೈಕೆ ಮಾಡಲಾಗುತ್ತಿದೆ. ಎತ್ತಿನ ಬಂಡಿ, ಬೈಕ್ ಮೇಲೆ ದೂರದಿಂದ ಬಂದು ನೀರು ತೆಗೆದುಕೊಂಡು ಹೋಗುತ್ತಿದ್ದಾರೆ. ಬೇಗ ವಿದ್ಯುತ್ ದುರಸ್ತಿ ಮಾಡುವಂತೆ ಒತ್ತಾಯ ಬಂದಿದೆ.

ಇದನ್ನೂ ಓದಿ: Fraud Case: ಹಣ ಡಬ್ಲಿಂಗ್‌ ಕೇಸ್‌; ಬಹುಕೋಟಿ ವಂಚನೆ ಮಾಡಿದ್ದ ಆರೋಪಿಗಳು ನ್ಯಾಯಾಲಯಕ್ಕೆ ಶರಣು

ಎಲ್ಲೆಲ್ಲಿ ಮಳೆ ಅಬ್ಬರ?

ದಕ್ಷಿಣ ಕನ್ನಡ, ಉಡುಪಿ ಜಿಲ್ಲೆಗಳಲ್ಲಿ ಕೆಲವೆಡೆ ಹಗುರದಿಂದ ಸಾಧಾರಣ ಮಳೆ/ಗುಡುಗು ಸಹಿತ ಮಳೆಯಾಗುವ ಸಾಧ್ಯತೆಯಿದೆ. ಕೊಡಗು, ಕೋಲಾರ, ರಾಮನಗರ, ಬೆಂಗಳೂರು ಗ್ರಾಮಾಂತರ, ಬೆಂಗಳೂರು ನಗರ ಜಿಲ್ಲೆಗಳ ಒಂದೆರಡು ಕಡೆಗಳಲ್ಲಿ ಗುಡುಗು ಸಹಿತ ಗಾಳಿಯೊಂದಿಗೆ (30-40 ಕಿ.ಮೀ.) ಹಗುರದಿಂದ ಸಾಧಾರಣ ಮಳೆಯಾಗಲಿದೆ.

ಉತ್ತರ ಕನ್ನಡ ಜಿಲ್ಲೆಯ ಕೆಲವು ಸ್ಥಳಗಳಲ್ಲಿ ಹಗುರಮಳೆ/ಗುಡುಗು ಸಹಿತ ಮಳೆಯಾದರೆ, ಬೆಳಗಾವಿ, ಧಾರವಾಡ, ಹಾವೇರಿ, ಚಾಮರಾಜನಗರ, ಚಿಕ್ಕಬಳ್ಳಾಪುರ, ಚಿಕ್ಕಮಗಳೂರು, ಹಾಸನ, ಮಂಡ್ಯ, ಮೈಸೂರು, ತುಮಕೂರು ಜಿಲ್ಲೆಗಳ ಒಂದೆರಡು ಕಡೆಗಳಲ್ಲಿ ಗುಡುಗು ಸಹಿತ ಗಾಳಿಯೊಂದಿಗೆ (30-40 kmph) ಹಗುರ ಮಳೆಯ ನಿರೀಕ್ಷೆ ಇದೆ. ಬಾಗಲಕೋಟೆ, ಬೀದರ್, ಗದಗ, ಕಲಬುರಗಿ, ಕೊಪ್ಪಳ, ರಾಯಚೂರು, ವಿಜಯಪುರ, ಯಾದಗಿರಿ, ಬಳ್ಳಾರಿ, ಚಿತ್ರದುರ್ಗ, ದಾವಣಗೆರೆ, ರಾಮನಗರ, ಶಿವಮೊಗ್ಗ, ವಿಜಯನಗರ ಜಿಲ್ಲೆಗಳಲ್ಲಿ ಒಣ ಹವೆ ಹೆಚ್ಚಾಗುವ ಸಾಧ್ಯತೆಯಿದೆ.

ಈ ಸಂಗತಿಯ ಕುರಿತು ನಿಮ್ಮ ಅನಿಸಿಕೆ ಏನು? ಕಾಮೆಂಟ್ ಮೂಲಕ ತಿಳಿಸಿ

Continue Reading

ದಕ್ಷಿಣ ಕನ್ನಡ

Namaz: ಸಾರ್ವಜನಿಕ ನಮಾಜ್‌ ನಿಲ್ಲಿಸದಿದ್ದರೆ ಹನುಮಾನ್‌ ಚಾಲೀಸಾ ಪಠನ: ವಿಹಿಂಪ ಎಚ್ಚರಿಕೆ

ಮೊನ್ನೆ ಶುಕ್ರವಾರ ಮಂಗಳೂರಿನ ಕಂಕನಾಡಿಯಲ್ಲಿ ಮಸೀದಿ ಮುಂಭಾಗ ಇರುವ ರಸ್ತೆಯಲ್ಲೇ ನಮಾಜ್ (Namaz) ಮಾಡಲಾಗಿತ್ತು. ರಸ್ತೆಯಲ್ಲಿ ನಡೆದ ನಮಾಜ್ ವೀಡಿಯೋ ವೈರಲ್ ಆಗಿದ್ದು, ರಸ್ತೆಯಲ್ಲಿ ಹೋಗುತ್ತಿದ್ದ ವಾಹನಗಳು ನಮಾಜ್ ಗಮನಿಸಿ ಯೂಟರ್ನ್ ಮಾಡಿಕೊಂಡಿದ್ದವು. ಕದ್ರಿ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ನಡೆದಿರುವ ಈ ಬೆಳವಣಿಗೆ ಬಗ್ಗೆ ವಿಹಿಂಪ ಆಕ್ಷೇಪಿಸಿದೆ.‌

VISTARANEWS.COM


on

namaz in road mangalore
Koo

ಮಂಗಳೂರು: ಮಂಗಳೂರಿನ ಕಂಕನಾಡಿ ಬಳಿ ರಸ್ತೆಯಲ್ಲೇ ನಮಾಜ್ (Namaz in road) ಮಾಡಿದ ಪ್ರಕರಣಕ್ಕೆ ಸಂಬಂಧಿಸಿ ವಿಶ್ವ ಹಿಂದೂ ಪರಿಷತ್ತು (Vishwa Hindu Parishad) ಆಕ್ಷೇಪ ವ್ಯಕ್ತಪಡಿಸಿದ್ದು, ರಸ್ತೆ, ಸಾರ್ವಜನಿಕ ಸ್ಥಳಗಳಲ್ಲಿ ನಮಾಜ್ ತಡೆಯುವಂತೆ ಜಿಲ್ಲಾಡಳಿತಕ್ಕೆ ಮನವಿ ಮಾಡಿದೆ. ನಿಲ್ಲಿಸದಿದ್ದರೆ ಸಾಮೂಹಿಕವಾಗಿ ಹನುಮಾನ್ ಚಾಲೀಸಾ (Hanuman Chalisa) ಪಠಿಸಿ ಪ್ರತಿಭಟನೆ ನಡೆಸುವ ಎಚ್ಚರಿಕೆ ನೀಡಿದೆ.

ಮೊನ್ನೆ ಶುಕ್ರವಾರ ಮಂಗಳೂರಿನ ಕಂಕನಾಡಿಯಲ್ಲಿ ಮಸೀದಿ ಮುಂಭಾಗ ಇರುವ ರಸ್ತೆಯಲ್ಲೇ ನಮಾಜ್ ಮಾಡಲಾಗಿತ್ತು. ರಸ್ತೆಯಲ್ಲಿ ನಡೆದ ನಮಾಜ್ ವೀಡಿಯೋ ವೈರಲ್ ಆಗಿದ್ದು, ರಸ್ತೆಯಲ್ಲಿ ಹೋಗುತ್ತಿದ್ದ ವಾಹನಗಳು ನಮಾಜ್ ಗಮನಿಸಿ ಯೂಟರ್ನ್ ಮಾಡಿಕೊಂಡಿದ್ದವು. ಕದ್ರಿ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ನಡೆದಿರುವ ಈ ಬೆಳವಣಿಗೆ ಬಗ್ಗೆ ವಿಹಿಂಪ ಆಕ್ಷೇಪಿಸಿದೆ.‌

“ಕೆಲವು ಕಡೆ ರಸ್ತೆ ಮತ್ತು ಸಾರ್ವಜನಿಕ ಜಾಗದಲ್ಲಿ ನಮಾಜ್ ಮಾಡುತ್ತಿರುವ ಘಟನೆಗಳು ನಡೆಯುತ್ತಿರುವುದು ಜಿಲ್ಲೆಯಲ್ಲಿ ಅಶಾಂತಿ ನಿರ್ಮಿಸಲು ಸಂಚು ರೂಪಿಸುತ್ತಿದ್ದಾರೆ. ತಕ್ಷಣ ಜಿಲ್ಲಾಡಳಿತ ಇವರ ವಿರುದ್ಧ ಕ್ರಮ ತೆಗೆದುಕೊಳ್ಳಬೇಕೆಂದು ಆಗ್ರಹಿಸುತ್ತೇವೆ. ಮುಂದಿನ ದಿನಗಳಲ್ಲಿ ಈ ರೀತಿಯ ಘಟನೆ ಮರುಕಳಿಸಿದರೆ ಅದೇ ಸ್ಥಳದಲ್ಲಿ ಸಾಮೂಹಿಕ ಹನುಮಾನ್ ಚಾಲೀಸಾ ಪಠಣ ಮಾಡುವುದರ ಮೂಲಕ ತಡೆಯುತ್ತೇವೆ ಎಂಬ ಎಚ್ಚರಿಕೆ ಕೊಡುತ್ತೇವೆ” ಎಂದು ವಿಶ್ವ ಹಿಂದೂ ಪರಿಷದ್ ಪ್ರಾಂತ ಸಹ ಕಾರ್ಯದರ್ಶಿ ಶರಣ್ ಪಂಪವೆಲ್ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ಇದು ಪಾಕಿಸ್ತಾನವಲ್ಲ, ಹಿಂದೂಸ್ತಾನ: ಈಶ್ವರಪ್ಪ

“ರಸ್ತೆಯಲ್ಲಿ ನಮಾಜ್‌ ಮಾಡಲು, ಮುಸಲ್ಮಾನರು ಏನು ಬೇಕಾದರೂ ಮಾಡಬಹುದು ಎನ್ನಲು ಇದು ಪಾಕಿಸ್ತಾನ ಅಲ್ಲ, ಹಿಂದೂಸ್ತಾನ” ಎಂದು ಕೆ.ಎಸ್‌ ಈಶ್ವರಪ್ಪ ಗುಡುಗಿದ್ದಾರೆ. “ಮಂಗಳೂರು ಪಾಕಿಸ್ತಾನದ ಜಿಲ್ಲೆಯಲ್ಲ. ಮಂಗಳೂರು ಹಿಂದುತ್ವ ವೀರರ ಭೂಮಿ. ಇಲ್ಲಿ ರಸ್ತೆಯಲ್ಲಿ ನಮಾಜ್ ಮಾಡಲು ದುಷ್ಟ ಶಕ್ತಿಗಳು ಯಶಸ್ವಿಯಾಗಿದ್ದು ನೋವಾಗಿದೆ. ಕರ್ನಾಟಕದಲ್ಲಿ ಮುಖ್ಯಮಂತ್ರಿಗಳು, ಗೃಹ ಸಚಿವರು, ಸರಕಾರ ಸತ್ತಿದೆಯೋ ಬದುಕಿದೆಯೋ ಗೊತ್ತಾಗ್ತಿಲ್ಲ. ಒಬ್ಬ ಇದು ನಮ್ಮ ಸರ್ಕಾರ ಟಿಪ್ಪು ಸುಲ್ತಾನ್ ರಾಜ್ಯ ಅಂತಾನೆ. ಬಿಟ್ಟರೆ ಸಿಎಂ, ಗೃಹ ಸಚಿವರು, ಹಿಂದುಗಳ ಮನೆಗೆ ಬಂದು ನಮಾಜ್ ಮಾಡುತ್ತಾರೆ” ಎಂದು ಅವರು ಆಕ್ರೋಶ ವ್ಯಕ್ತಪಡಿಸಿದ್ದಾರೆ.

“ನಿಮ್ಮ ಮನೆಯಲ್ಲಿ ನಜಾಮ್ ಮಾಡಿಸಿ ಬೇಡ ಅನ್ನಲ್ಲ. ಎಲ್ಲ ಮುಸ್ಲಿಮರನ್ನು ಟೀಕೆ ಮಾಡುತ್ತಿಲ್ಲ, ಅರ್ಥ ಮಾಡಿಕೊಳ್ಳಿ. ಇವರು ಯಾರೋ ರಾಷ್ಟ್ರದ್ರೋಹಿಗಳು ಮಾಡುತ್ತಿರುವ ಕುತಂತ್ರ. ಇಂತಹವರನ್ನು ಒಳಗೆ ಹಾಕಿದರೆ ಇತರ ಮುಸ್ಲಿಮರಿಗೂ ಸಂತೋಷ ಆಗುತ್ತದೆ. ಮುಸ್ಲಿಂ ಸಮುದಾಯಕ್ಕೆ ಅಪಮಾನ ಆಗುತ್ತಿದೆ ಅಂತ ಅವರೂ ಹೇಳುತ್ತಿದ್ದಾರೆ. ತುಷ್ಟೀಕರಣ ನೀತಿ ಸರ್ಕಾರವನ್ನು ಸುಡುತ್ತೆ, ಭಸ್ಮ ಮಾಡುತ್ತೆ. ರಸ್ತೆಯಲ್ಲಿ ನಮಾಜ್ ಮಾಡಿದವರನ್ನು ತಕ್ಷಣ ಅರೆಸ್ಟ್ ಮಾಡಿ. ರಾಷ್ಟ್ರದ್ರೋಹದ ಕೃತ್ಯ ಕೇಸ್ ಹಾಕಿ” ಎಂದು ಅವರು ಆಗ್ರಹಿಸಿದ್ದಾರೆ.

ಇದನ್ನೂ ಓದಿ: Viral Video: ನಡು ರಸ್ತೆಯಲ್ಲಿ ಪಿಸ್ತೂಲ್‌ ತೋರಿಸಿ ವ್ಯಕ್ತಿ ಮೇಲೆ ಹಲ್ಲೆ; ಅಂತಾರಾಷ್ಟ್ರೀಯ ಮಟ್ಟದ ಶೂಟರ್‌ನಿಂದ ದಾಂಧಲೆ

Continue Reading

ಮಳೆ

Karnataka Weather : ಕರಾವಳಿ, ಮಲೆನಾಡಲ್ಲಿ ಗುಡುಗು, ಮಿಂಚು; ಒಳನಾಡಿನಲ್ಲಿ ಸಾಧಾರಣ ಮಳೆ

Rain News : ಕರಾವಳಿ, ಮಲೆನಾಡು ಭಾಗದಲ್ಲಿ ಗುಡುಗು ಸಹಿತ ಮಳೆಯಾಗುವ ನಿರೀಕ್ಷೆ ಇದ್ದು, ದಕ್ಷಿಣ ಹಾಗೂ ಉತ್ತರ ಒಳನಾಡಿನಲ್ಲಿ ಸಾಧಾರಣ ಮಳೆಯಾಗಲಿದೆ. ಪ್ರತ್ಯೇಕ ಕಡೆಗಳಲ್ಲಿ ಬಿರುಗಾಳಿ ಬೀಸುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆಯನ್ನು (Karnataka Weather Forecast) ನೀಡಿದೆ.

VISTARANEWS.COM


on

By

karnataka weather Forecast
Koo

ಬೆಂಗಳೂರು: ದಕ್ಷಿಣ ಒಳನಾಡು ಹಾಗೂ ಉತ್ತರ ಒಳನಾಡಿನ ಜಿಲ್ಲೆಗಳಲ್ಲಿ ಚದುರಿದಂತೆ ಹಗುರದಿಂದ ಮಧ್ಯಮ ಮಳೆಯಾಗುವ (Rain News) ಸಾಧ್ಯತೆಯಿದೆ. ಕರಾವಳಿ ಮತ್ತು ಮಲೆನಾಡು ಜಿಲ್ಲೆಗಳಲ್ಲಿ ಹಗುರದಿಂದ ಕೂಡಿದ ಮಳೆ ಇರಲಿದೆ. ರಾಜ್ಯದ ಪ್ರತ್ಯೇಕ ಸ್ಥಳಗಳಲ್ಲಿ ಗುಡುಗು, ಮಿಂಚು ಸಹಿತ ಗಂಟೆಗೆ 30-40 ಕಿ.ಮೀ ಗಾಳಿ ಬೀಸಲಿದೆ ಎಂದು ಹವಾಮಾನ ಇಲಾಖೆ (karnataka weather Forecast) ಮುನ್ಸೂಚನೆಯನ್ನು ನೀಡಿದೆ.

ದಕ್ಷಿಣ ಒಳನಾಡಿನ ರಾಮನಗರ ಮತ್ತು ಕೋಲಾರ ಜಿಲ್ಲೆಗಳಲ್ಲಿ ಸಾಧಾರಣ ಮಳೆಯಾಗಬಹುದು. ಬೆಂಗಳೂರು ನಗರ ಮತ್ತು ತುಮಕೂರಿನಲ್ಲಿ ಚದುರಿದಂತೆ ಮಳೆಯಾಗುವ ನಿರೀಕ್ಷೆ ಇದೆ. ಉಳಿದ ಭಾಗಗಳಲ್ಲಿ ಒಣ ಹವೆ ಇರಲಿದೆ.

ಉತ್ತರ ಒಳನಾಡಿನ ಬೆಳಗಾವಿ, ಬಾಗಲಕೋಟೆ, ವಿಜಯಪುರ, ಗದಗ ಮತ್ತು ಕೊಪ್ಪಳ ಜಿಲ್ಲೆಗಳಲ್ಲಿ ಸಾಧಾರಣ ಮಳೆಯಾಗುವ ಸಾಧ್ಯತೆಯಿದೆ. ಉಳಿದಂತೆ ಕಲಬುರಗಿ, ಬೀದರ್, ಯಾದಗಿರಿ, ರಾಯಚೂರು, ಬಳ್ಳಾರಿ ಮತ್ತು ವಿಜಯನಗರ ಜಿಲ್ಲೆಗಳಲ್ಲಿ ಹಗುರದಿಂದ ಕೂಡಿದ ಮಳೆಯಾಗಲಿದೆ.

ಮಲೆನಾಡಿನ ಹಾಸನ, ಚಿಕ್ಕಮಗಳೂರು, ಕೊಡಗು, ಶಿವಮೊಗ್ಗ ಜಿಲ್ಲೆಗಳಲ್ಲಿ ಗುಡುಗು ಸಹಿತ ಮಳೆಯಾದರೆ, ಕರಾವಳಿಯ ಉತ್ತರ ಕನ್ನಡ, ಉಡುಪಿ, ದಕ್ಷಿಣ ಕನ್ನಡ ಜಿಲ್ಲೆಗಳಲ್ಲೂ ಮಳೆಯು ಅಬ್ಬರಿಸಲಿದೆ. ಇನ್ನೂ ಬೆಂಗಳೂರಿನಲ್ಲಿ ಗುಡುಗು ಸಹಿತ ಮಳೆಯಾಗುವ ಸಾಧ್ಯತೆಯಿದೆ. ಗರಿಷ್ಠ ಮತ್ತು ಕನಿಷ್ಠ ತಾಪಮಾನವು ಕ್ರಮವಾಗಿ 31 ಡಿಗ್ರಿ ಸೆಲ್ಸಿಯಸ್ ಮತ್ತು 22 ಡಿಗ್ರಿ ಸೆಲ್ಸಿಯಸ್ ಇರಲಿದೆ.

ಇದನ್ನೂ ಓದಿ: Constable Death : ಹುಬ್ಬಳ್ಳಿಯಲ್ಲಿ ರೈಲಿಗೆ ತಲೆ ಕೊಟ್ಟ ಕಾನ್ಸ್‌ಟೇಬಲ್‌; ಆತ್ಮಹತ್ಯೆಗೆ ಕಾರಣ ಇನ್ನೂ ನಿಗೂಢ

ಬಾಯಿಯ ಎಲ್ಲ ಸಮಸ್ಯೆಗಳಿಗೂ ಮೌತ್‌ವಾಷ್‌ ಪರಿಹಾರವೆ?

ಜಾಹೀರಾತುಗಳನ್ನು ನೋಡಿ ಮರುಳಾಗುವುದು, ಅದನ್ನೇ ಅನುಸರಿಸುವುದು ಹೊಸದೇನಲ್ಲ. ಉದಾಹರಣೆಗೆ ಹೇಳುವುದಾದರೆ, ಯಾವುದೋ ಟೂತ್‌ಪೇಸ್ಟ್‌ ಉಪಯೋಗಿಸಿದರೆ ಹಲ್ಲುಗಳೆಲ್ಲ ಫಳಫಳಿಸಿ, ಉಸಿರು ತಾಜಾ ಆಗುತ್ತದೆ ಎಂದಿದ್ದರೆ, ಅದು ಸತ್ಯ ಎಂದು ಭಾವಿಸಿಯೇ ನಾವು ಉಪಯೋಗಿಸುತ್ತೇವೆ. ಮೌತ್‌ವಾಷ್‌ ಸಹ ಅದೇ ಸಾಲಿಗೆ ಸೇರುವಂಥದ್ದು. ಯಾವುದೇ ಮನೆಯ ಬಾತ್‌ರೂಂಗಳಲ್ಲಿ ಅದೀಗ ಖಾಯಂ ಸ್ಥಾನವನ್ನು ಗಿಟ್ಟಿಸಿಕೊಂಡಿದೆ. ಬಣ್ಣದ ಬಾಟಲಿಗಳ ಮೇಲಿನ ಮೋಹವನ್ನೋ ಅಥವಾ ಜಾಹೀರಾತುಗಳ ಭರವಸೆಯನ್ನೋ ಒಂದೆಡೆ ಇಟ್ಟು, ಮೌತ್‌ವಾಷ್‌ (Mouthwashes) ಬಳಕೆ ಇತಿ-ಮಿತಿಗಳೇನು ಎಂಬುದನ್ನು ಅರ್ಥ ಮಾಡಿಕೊಳ್ಳೋಣ.

Mouthwashes

ದುರ್ಗಂಧ ದೂರ

ಬಾಯಿಯ ದುರ್ಗಂಧ ಎಷ್ಟೋ ಸಂದರ್ಭಗಳಲ್ಲಿ ಮುಜುಗರ ತರುವಂತಹದ್ದು. ಸಾಮಾಜಿಕ, ವೈಯಕ್ತಿಕ ಅಥವಾ ವೃತ್ತಿಯ ಸಂದರ್ಭಗಗಳಲ್ಲಿ ಇದನ್ನು ನಿಭಾಯಿಸುವುದು ಕಷ್ಟವಾಗಬಹುದು. ಬಾಯಿಯ ಆರೋಗ್ಯ ಕಾಪಾಡಿಕೊಳ್ಳುವುದು, ಜೀರ್ಣಾಂಗಗಳ ಆರೋಗ್ಯ ನಿಭಾಯಿಸುವುದು, ಆಗಾಗ ನೀರು ಕುಡಿಯುವುದು- ಇಂಥವೆಲ್ಲ ಬಾಯಿಯ ದುರ್ಗಂಧ ನಿವಾರಣೆಯಲ್ಲಿ ಮುಖ್ಯವಾದವು. ಜೊತೆಗೆ ಮೌತ್‌ವಾಷ್‌ ಬಳಕೆ ಸಹ ಈ ಸಮಸ್ಯೆಗೆ ಸಮರ್ಥ ಪರಿಹಾರವನ್ನು ಒದಗಿಸಬಲ್ಲದು.

ಒಸಡಿನ ಸಮಸ್ಯೆ ದೂರ

ಕೆಲವು ಮೌತ್‌ವಾಷ್‌ಗಳು ಬ್ಯಾಕ್ಟೀರಿಯ ವಿರೋಧಿ ಸಾಮರ್ಥ್ಯವನ್ನು ಹೊಂದಿರುತ್ತವೆ. ಇಂಥವುಗಳ ನಿಯಮಿತ ಬಳಕೆಯಿಂದ ಒಸಡಿನ ಸೋಂಕುಗಳನ್ನು ಮಟ್ಟ ಹಾಕಬಹುದು. ಪ್ಲೇಕ್‌ಗಳು ನಿರ್ಮಾಣವಾಗಿ ಒಸಡಿನ ಆರೋಗ್ಯಕ್ಕೆ ಸವಾಲೊಡ್ಡುವ ಸಾಧ್ಯತೆ ಇರುತ್ತದೆ. ಇವುಗಳಿಗೂ ಕೆಲವು ಮೌತ್‌ವಾಷ್‌ಗಳು ಪರಿಹಾರ ಒದಗಿಸಬಲ್ಲವು.

Woman using mouthwash after brushing

ಉಪಯೋಗ ಸುಲಭ

ಮನೆಯಲ್ಲಿದ್ದರೂ, ಪ್ರಯಾಣದಲ್ಲಿದ್ದರೂ ಇವುಗಳನ್ನು ಕೊಂಡೊಯ್ಯುವುದು ಮತ್ತು ಬಳಸುವುದು ಸುಲಭ. ಫ್ಲೋಸಿಂಗ್‌ನಂಥ ಕ್ರಮಗಳು ಸಮಯ ಬೇಡುತ್ತವೆ. ಮಾತ್ರವಲ್ಲ, ವಿಮಾನದಲ್ಲಿ, ಟ್ರೇನ್‌ನಲ್ಲಿ ಪ್ರಯಾಣಿಸುತ್ತಿದ್ದಾಗ ಇದನ್ನು ಮಾಡಲೂ ಸಾಧ್ಯವಿಲ್ಲ. ಆದರೆ ಮೌತ್‌ವಾಷ್‌ ಬಳಕೆಗೆ ಅಂಥ ಯಾವುದೇ ಅಡೆ-ತಡೆಗಳಿಲ್ಲ; ಇದರ ಬಳಕೆ ಅತಿ ಸುಲಭ.

ಹೆಚ್ಚುವರಿ ರಕ್ಷಣೆ

ಫ್ಲೂರೈಡ್‌ ಹೊಂದಿರುವ ಮೌತ್‌ವಾಷ್‌ಗಳು ಬಾಯಿಯ ಆರೋಗ್ಯದ ವಿಚಾರದಲ್ಲಿ ಹೆಚ್ಚುವರಿ ರಕ್ಷಣೆಯನ್ನು ಒದಗಿಸುತ್ತವೆ. ದಂತಗಳ ಎನಾಮಲ್‌ ರಕ್ಷಣೆ ಮಾಡಿ, ಒಡಸುಗಳನ್ನು ಸುರಕ್ಷಿತವಾಗಿ ಇರಿಸಿ, ಹಲ್ಲುಗಳ ಬೇರನ್ನು ಭದ್ರ ಮಾಡುತ್ತವೆ. ಎಲ್ಲಕ್ಕಿಂತ ಮುಖ್ಯವಾಗಿ, ಹಲ್ಲುಗಳು ಹುಳುಕಾಗಿ, ಕುಳಿಯಾಗದಂತೆ ರಕ್ಷಣೆ ನೀಡುತ್ತವೆ. ಒಟ್ಟಾರೆಯಾಗಿ ಬಾಯಿಯ ಆರೋಗ್ಯಕ್ಕೆ ಇದೊಂದು ಒಳ್ಳೆಯ ಆಯ್ಕೆ.

Woman with mouthwash

ಮಿತಿಗಳಿಲ್ಲವೇ?

ಹಾಗೆಂದು ಮೌತ್‌ವಾಷ್‌ ಬಳಕೆಯಲ್ಲಿ ಯಾವುದೇ ಸಮಸ್ಯೆ ಇಲ್ಲವೇ? ಅದನ್ನು ಬಳಸಿದಾಗ ಆಗುವುದೆಲ್ಲ ಒಳ್ಳೆಯದು ಎಂದು ತೀರ್ಮಾನಿಸಲು ಸಾಧ್ಯವೇ? ಎಂದು ಕೇಳಿದರೆ, ಹಾಗೇನಿಲ್ಲ. ಅದರಲ್ಲೂ ಸಮಸ್ಯೆಗಳು ಇಲ್ಲದಿಲ್ಲ. ಬಾಯಿಯ ಸರ್ವರೋಗಗಳಿಗೆ ಇದೊಂದೇ ಮದ್ದು ಎಂದು ಖಂಡಿತಕ್ಕೂ ಭಾವಿಸುವಂತಿಲ್ಲ. ಹಾಗಾದರೆ ಮೌತ್‌ವಾಷ್‌ ಬಳಸುವುದರಲ್ಲಿ ಇರುವಂಥ ಸಮಸ್ಯೆಗಳೇನು? ಯಾವುದರ ಬಗ್ಗೆ ಗಮನ ನೀಡಬೇಕು ಇದನ್ನು ಬಳಸುವಾಗ?

ಆಲ್ಕೋಹಾಲ್‌ ಕಿರಿಕಿರಿ

ಬಹಳಷ್ಟು ಮೌತ್‌ವಾಷ್‌ಗಳು ಆಲ್ಕೋಹಾಲ್‌ ಅಂಶವನ್ನು ಹೊಂದಿರುತ್ತವೆ. ಇದು ಬಾಯಿ ಒಣಗಿದಂತೆ ಮಾಡಿ, ಕಿರಿಕಿರಿ ಉಂಟುಮಾಡಬಹುದು. ದೀರ್ಘಕಾಲ ಇಂಥ ಮೌತ್‌ವಾಷ್‌ ಬಳಸುವುದರಿಂದ, ಈ ಸಮಸ್ಯೆಗಳು ಹೆಚ್ಚುತ್ತವೆ. ಹಾಗಾಗಿ ಸೂಕ್ಷ್ಮ ಒಸಡುಗಳು ಇರುವವರಿಗೆ ಮತ್ತು ಗರ್ಭಿಣಿಯರಿಗೆ ಆಲ್ಕೋಹಾಲ್‌ ಇಲ್ಲದಂಥ ಮೌತ್‌ವಾಷ್‌ ಬಳಕೆಯನ್ನು ವೈದ್ಯರು ಶಿಫಾರಸು ಮಾಡುತ್ತಾರೆ.

Female with mouthwash

ಸಮಸ್ಯೆ ತಿಳಿಯದು

ಬಾಯಿಯ ದುರ್ಗಂಧದ ಸಮಸ್ಯೆಗಳನ್ನು ಮೌತ್‌ವಾಷ್‌ಗಳು ತಡೆಯುವುದು ಹೌದಾದರೂ ಅದು ತಾತ್ಕಾಲಿಕ. ಬಾಯಿಯ ದುರ್ಗಂಧಕ್ಕೆ ಮೂಲ ಕಾರಣವೇನು ಎಂಬುದನ್ನು ಹುಡುಕಿ, ಅದನ್ನು ಪರಿಹರಿಸಿಕೊಳ್ಳುವುದು ಮುಖ್ಯ. ಹಲ್ಲುಗಳು ಹುಳುಕಾಗಿವೆಯೇ ಅಥವಾ ಜೀರ್ಣಾಂಗಗಳ ಸಮಸ್ಯೆಯಿಂದ ಹೀಗಾಗುತ್ತಿದೆಯೇ- ಅಂತೂ ಕಾರಣವೇನು ಎಂಬುದನ್ನು ಪತ್ತೆ ಮಾಡುವುದು ಅಗತ್ಯ. ಹಾಗಾಗಿ ಸಮಸ್ಯೆಗಳನ್ನು ಮೌತ್‌ವಾಷ್‌ ತಾತ್ಕಾಲಿಕವಾಗಿ ಮಾತ್ರವೇ ನಿವಾರಣೆ ಮಾಡಬಲ್ಲದು.

ಬಿಡುವಂತಿಲ್ಲ

ಮೌತ್‌ವಾಷ್‌ಗಳ ಬಳಕೆಯ ನೆವದಿಂದ ನಿತ್ಯದ ಸ್ವಚ್ಛತೆಯ ಅಭ್ಯಾಸಗಳನ್ನು ಬಿಡುವಂತಿಲ್ಲ. ಅಂದರೆ ನಿಯಮಿತವಾಗಿ ಬ್ರಷ್‌ ಮಾಡುವುದು, ಫ್ಲೋಸ್‌ ಮಾಡುವುದು, ಊಟ-ತಿಂಡಿಯ ನಂತರ ಬಾಯಿಗೆ ನೀರು ಹಾಕಿ ಮುಕ್ಕಳಿಸುವುದು- ಇವೆಲ್ಲ ಅಗತ್ಯ ಅಭ್ಯಾಸಗಳು. ಎಂದೋ ಪ್ರಯಾಣದ ಸಂದರ್ಭದಲ್ಲಿ ಬ್ರಷ್‌ ಮಾಡುವುದಕ್ಕೆ ಅನುಕೂಲವಿಲ್ಲ ಎನ್ನುವಾಗ ಮಾತ್ರವೇ ಮೌತ್‌ವಾಷ್‌ ಬಳಕೆಯನ್ನು ಪರ್ಯಾಯ ಆಗಿಸಿಕೊಳ್ಳಬಹುದೇ ಹೊರತು, ಸದಾ ಅಲ್ಲ.

ಈ ಸಂಗತಿಯ ಕುರಿತು ನಿಮ್ಮ ಅನಿಸಿಕೆ ಏನು? ಕಾಮೆಂಟ್ ಮೂಲಕ ತಿಳಿಸಿ

Continue Reading

ಬೆಂಗಳೂರು

Bengaluru News: ಬೆಂಗಳೂರಿನಲ್ಲಿ ಕರಾವಳಿಯ ಕೊಂಕಣಿ ಭಾಷಿಕರ ಕಲರವ

Bengaluru News: ಕೊಂಕಣಿ ಕ್ಯಾಥೋಲಿಕ್‌ ಅಸೋಷಿಯೇಷನ್ ವತಿಯಿಂದ ಭಾನುವಾರ ಕೊಂಕಣಿ ಕ್ಯಾಥೋಲಿಕ್‌ ಸಂಘಗಳ ಒಕ್ಕೂಟದ 26 ನೇ ವಾರ್ಷಿಕೋತ್ಸವ ಕಾರ್ಯಕ್ರಮವು ಬೆಂಗಳೂರಿನ ಅರಮನೆ ಮೈದಾನದಲ್ಲಿ ಅದ್ದೂರಿಯಾಗಿ ಜರುಗಿತು. ವಿವಿಧ ಕ್ಷೇತ್ರಗಳಲ್ಲಿ ಗಣನೀಯ ಸೇವೆ ಸಲ್ಲಿಸಿದ ನಾಗರಿಕರಿಗೆ ಹಾಗೂ ಸಂಘ ಸಂಸ್ಥೆಗಳಿಗೆ ಪ್ರಶಸ್ತಿ ಪ್ರದಾನ ಮಾಡಲಾಯಿತು.

VISTARANEWS.COM


on

26th Anniversary Programme of Consortium of Konkani Catholic Associations in Bengaluru
Koo

ಬೆಂಗಳೂರು: ಕೊಂಕಣಿ ಕ್ಯಾಥೋಲಿಕ್‌ ಅಸೋಷಿಯೇಷನ್ ವತಿಯಿಂದ ಭಾನುವಾರ ಕೊಂಕಣಿ ಕ್ಯಾಥೋಲಿಕ್‌ ಸಂಘಗಳ ಒಕ್ಕೂಟದ 26 ನೇ ವಾರ್ಷಿಕೋತ್ಸವ ಕಾರ್ಯಕ್ರಮವು ನಗರದ (Bengaluru News) ಅರಮನೆ ಮೈದಾನದಲ್ಲಿ ಅದ್ಧೂರಿಯಾಗಿ ಜರುಗಿತು.

ಇದನ್ನೂ ಓದಿ: Karnataka Congress: ಈ ದೇಶವನ್ನು ಅಭಿವೃದ್ಧಿಗೊಳಿಸಿದ್ದು ನೆಹರೂ ಹೊರತು ಮೋದಿಯಲ್ಲ: ಸಿದ್ದರಾಮಯ್ಯ ಪ್ರತಿಪಾದನೆ

ನಗರದ ಅರಮನೆ ಮೈದಾನದಲ್ಲಿ ಹಮ್ಮಿಕೊಳ್ಳಲಾಗಿದ್ದ ಕಾರ್ಯಕ್ರಮವನ್ನು ಗಣ್ಯರು ಜ್ಯೋತಿ ಬೆಳಗಿಸುವ ಮೂಲಕ ಉದ್ಘಾಟಿಸಿದರು. ಸುಪ್ರೀಂ ಕೋರ್ಟ್‌ನ ನಿವೃತ್ತ ನ್ಯಾಯಮೂರ್ತಿ ಎನ್. ಸಂತೋಷ್ ಹೆಗ್ಡೆ, ಮಂಗಳೂರು ನಗರ ಮಾಜಿ ಶಾಸಕ ಜೆ.ಆರ್.ಲೋಬೊ ಹಾಗೂ ಎಫ್‌ಎಂಸಿಐ ಕಂಕನಾಡಿ ಮತ್ತು ಆಡಳಿತದ ನಿಯೋಜಿತ ನಿರ್ದೇಶಕ ರೆವ್. ಫಾ. ಫೌಸ್ಟಿನ್ ಲ್ಯೂಕಾಸ್ ಲೋಬೊ ಸೇರಿದಂತೆ ಹಲವು ಗಣ್ಯರು ಭಾಗಿಯಾಗಿದ್ದರು. ವಿವಿಧ ಕ್ಷೇತ್ರಗಳಲ್ಲಿ ಗಣನೀಯ ಸೇವೆ ಸಲ್ಲಿಸಿದ ನಾಗರಿಕರಿಗೆ ಹಾಗೂ ಸಂಘ ಸಂಸ್ಥೆಗಳಿಗೆ ಪ್ರಶಸ್ತಿ ಪ್ರದಾನ ಕಾರ್ಯಕ್ರಮ ಜರುಗಿತು.

ಕಾರ್ಯಕ್ರಮದಲ್ಲಿ ಜೀವಮಾನ ಸಾಧಕ ಪ್ರಶಸ್ತಿ, ವೃತ್ತಿಯಾಧಾರಿತ ಸಾಧಕ ಪ್ರಶಸ್ತಿ, ವರ್ಷದ ಉದ್ಯಮಿ ಪ್ರಶಸ್ತಿ ಹಾಗೂ ವಿಶೇಷ ಸಮೂಹ ಸೇವಾ ಪ್ರಶಸ್ತಿ ಪ್ರದಾನ ಮಾಡಲಾಯಿತು.

ಇದನ್ನೂ ಓದಿ: Mouthwashes: ಬಾಯಿಯ ಎಲ್ಲ ಸಮಸ್ಯೆಗಳಿಗೂ ಮೌತ್‌ವಾಷ್‌ ಪರಿಹಾರವೆ? ಇದರ ಇತಿಮಿತಿ ಬಗ್ಗೆಯೂ ತಿಳಿದಿರಲಿ

ಕೊಂಕಣಿ ಕಲರವ

ನಗರದ ಅರಮನೆ ಮೈದಾನದಲ್ಲಿ ಕೊಂಕಣಿ ಕಲರವ ಮೂಡಿತ್ತು, ಕೊಂಕಣಿ ಸಮುದಾಯದವರು ಒಂದೆಡೆ ಸೇರಿ ಸಂಭ್ರಮಿಸಿದರು. ಅಸೋಷಿಯೇಷನ್ ವತಿಯಿಂದ ಕೊಂಕಣಿ ಕ್ಯಾಥೋಲಿಕ್‌ ಸಂಘಗಳ ಒಕ್ಕೂಟದ 26ನೇ ವಾರ್ಷಿಕೋತ್ಸವ ಕಾರ್ಯಕ್ರಮದ ಅಂಗವಾಗಿ ವಿಶೇಷ ಕಾರ್ಯಕ್ರಮಗಳನ್ನು ಹಮ್ಮಿಕೊಳ್ಳಲಾಗಿತ್ತು. ಉದ್ಯೋಗ ಮೇಳ, ನೃತ್ಯ ಸ್ಪರ್ಧೆ, ವಿಂಟೇಜ್ ಕಾರುಗಳ ವೀಕ್ಷಣೆ, ಕ್ಯಾನ್ಸರ್ ಪೀಡಿತರಿಗೆ ಹಣ ಸಂಗ್ರಹಣೆ ಕಾರ್ಯಕ್ರಮ, ಮಕ್ಕಳ ಆಟಗಳು, ಸಂಗೀತ ಸಂಜೆ ಸೇರಿದಂತೆ ಇತರೆ ಕಾರ್ಯಕ್ರಮಗಳು ಜರುಗಿದವು.

Continue Reading
Advertisement
T20 World Cup
ಕ್ರೀಡೆ15 mins ago

T20 World Cup : ಭಾರತ- ಪಾಕ್ ಪಂದ್ಯ ಐಸಿಸ್​ ಉಗ್ರರಿಂದ ಬಾಂಬ್ ಬೆದರಿಕೆ

namaz on road
ಪ್ರಮುಖ ಸುದ್ದಿ45 mins ago

ವಿಸ್ತಾರ ಸಂಪಾದಕೀಯ: ನಡುರಸ್ತೆಯಲ್ಲೇಕೆ ನಮಾಜ್‌ ಮಾಡಬೇಕು?

Dina Bhavishya
ಭವಿಷ್ಯ45 mins ago

Dina Bhavishya : ಈ ರಾಶಿಯವರು ಜಂಟಿ ಹೂಡಿಕೆ ವ್ಯವಹಾರದಿಂದ ದೂರವಿರಿ

Prajwal Revanna Case
ಪ್ರಮುಖ ಸುದ್ದಿ7 hours ago

Prajwal Revanna Case : ಜರ್ಮನಿಯಿಂದ ಭಾರತಕ್ಕೆ ಬರಲು ವಿಮಾನ ಟಿಕೆಟ್ ಬುಕ್ ಮಾಡಿದ ಪ್ರಜ್ವಲ್ ರೇವಣ್ಣ

chakravarthy sulibele
ಕರ್ನಾಟಕ7 hours ago

Chakravarthy Sulibele : ಮಂಡಿಯೂರಿ ಭೈರಪ್ಪ ಅವರಿಂದ ಸಾವರ್ಕರ್ ಪ್ರಶಸ್ತಿ ಸ್ವೀಕರಿಸಿದ ಚಕ್ರವರ್ತಿ ಸೂಲಿಬೆಲೆ

Cyber Crime
ಪ್ರಮುಖ ಸುದ್ದಿ7 hours ago

Cyber Crime : ಹೆಣ್ಣು ಮಕ್ಕಳ ಫೋಟೋ ಅಶ್ಲೀಲಗೊಳಿಸಿ ಪೋಸ್ಟ್​ ಮಾಡುತ್ತಿದ್ದವನ ಬಂಧನ

Bomb Threat
ಪ್ರಮುಖ ಸುದ್ದಿ8 hours ago

Bomb Threat : ತೆಲಂಗಾಣ ಡಿಸಿಎಂ ಮನೆಗೆ ಬಾಂಬ್​ ಬೆದರಿಕೆ; ಆತಂಕ

Acid attack
ಕರ್ನಾಟಕ8 hours ago

Acid attack: ಮನೆ ಬಾಗಿಲು ತೆರೆಯದ ಹಿನ್ನೆಲೆ ವಿವಾಹಿತ ಪ್ರಿಯತಮೆಗೆ ಆ್ಯಸಿಡ್ ಎರಚಿದ ಪ್ರಿಯಕರ!

Cab service
ಪ್ರಮುಖ ಸುದ್ದಿ8 hours ago

Cab Service : ಆ್ಯಪ್​ ಆಧಾರಿತ ಕ್ಯಾಬ್​ಗಳು ಶೇ. 5ಕ್ಕಿಂತ ಹೆಚ್ಚು ಸೇವಾ ಶುಲ್ಕ ವಿಧಿಸುವಂತಿಲ್ಲ; ಸರ್ಕಾರದ ಆದೇಶಕ್ಕೆ ಕೋರ್ಟ್​ ಮನ್ನಣೆ

Gauri Khan
ಸಿನಿಮಾ9 hours ago

Gauri Khan: ಇಸ್ಲಾಂಗೆ ಮತಾಂತರ ಆಗದೇ ಇರಲು ಕಾರಣ ತಿಳಿಸಿದ ಶಾರುಖ್ ಖಾನ್ ಪತ್ನಿ ಗೌರಿ!

Sharmitha Gowda in bikini
ಕಿರುತೆರೆ8 months ago

Geetha Serial Kannada: ನಿದ್ದೆ ಕದ್ದ ಚೋರಿ! ನಟಿ `ಭಾನುಮತಿ’ ಹಾಟ್‌ ಪೋಟೊಗಳಿಗೆ ಫ್ಯಾನ್ಸ್ ಫುಲ್ ಫಿದಾ

Kannada Serials
ಕಿರುತೆರೆ8 months ago

Kannada Serials TRP: 2ನೇ ಸ್ಥಾನದಲ್ಲಿ 2 ಧಾರಾವಾಹಿಗಳು; ಟಿಆರ್‌ಪಿ ರೇಸ್‌ನಲ್ಲಿಲ್ಲ ಭಾಗ್ಯಲಕ್ಷ್ಮೀ!

Bigg Boss- Saregamapa 20 average TRP
ಕಿರುತೆರೆ7 months ago

Kannada Serials TRP: ಏಳನೇ ಸ್ಥಾನಕ್ಕೆ ʻಅಮೃತಧಾರೆʼ ಕುಸಿತ; ಬಿಗ್‌ ಬಾಸ್‌-ಸರಿಗಮಪ ಟಿಆರ್‌ಪಿ ಎಷ್ಟು?

galipata neetu
ಕಿರುತೆರೆ6 months ago

Kanyadana Serial: ಕಿರುತೆರೆಗೆ ಮತ್ತೆ ಎಂಟ್ರಿ ಕೊಟ್ಟ ʻಗಾಳಿಪಟʼ ಖ್ಯಾತಿಯ ʻನೀತುʼ!

Kannada Serials
ಕಿರುತೆರೆ8 months ago

Kannada Serials TRP: ನಾಲ್ಕನೇ ಸ್ಥಾನಕ್ಕೆ ಕುಸಿತ ಕಂಡ ʻಸೀತಾ ರಾಮʼ; ಟಿಆರ್‌ಪಿ ರೇಸ್‌ಗೆ ʻಭಾಗ್ಯಲಕ್ಷ್ಮಿʼ ಬ್ಯಾಕ್‌!

Kannada Serials
ಕಿರುತೆರೆ8 months ago

Kannada Serials TRP: ಟಿಆರ್‌ಪಿಯಲ್ಲಿ ʻಭಾಗ್ಯಲಕ್ಷ್ಮೀʼ ಹವಾ; ʻಪುಟ್ಟಕ್ಕನ ಮಕ್ಕಳುʼ ಧಾರಾವಾಹಿಗೆ ಸಂಕಷ್ಟ!

Bigg Boss' dominates TRP; Sita Rama fell to the sixth position
ಕಿರುತೆರೆ7 months ago

Kannada Serials TRP: ಟಿಆರ್‌ಪಿಯಲ್ಲಿ ʻಬಿಗ್ ಬಾಸ್ʼದೇ ಮೇಲುಗೈ; 6ನೇ ಸ್ಥಾನಕ್ಕೆ ಕುಸಿದ ʻಸೀತಾ ರಾಮʼ

geetha serial Dhanush gowda engagement
ಕಿರುತೆರೆ5 months ago

Dhanush Gowda: ಗೀತಾ ಧಾರಾವಾಹಿ ನಟನ ನಿಶ್ಚಿತಾರ್ಥ; ಭವ್ಯಾಳ ಕಮೆಂಟ್‌ ಬಾಕ್ಸ್‌ ಆಫ್‌!

varun
ಕಿರುತೆರೆ6 months ago

Brindavana Serial: ʼಬೃಂದಾವನʼ ಧಾರಾವಾಹಿಯಲ್ಲಿ ದೊಡ್ಡ ಟ್ವಿಸ್ಟ್‌; ಪ್ರಮುಖ ಪಾತ್ರಧಾರಿಯೇ ಬದಲು

Kannada Serials
ಕಿರುತೆರೆ9 months ago

Kannada Serials TRP: ಟಿಆರ್‌ಪಿಯಲ್ಲಿ ಏರಿಕೆ ಕಂಡ ʻಅಮೃತಧಾರೆʼ; ʻಗಟ್ಟಿಮೇಳʼಕ್ಕೆ ನಾಲ್ಕನೇ ಸ್ಥಾನ!

Karnataka weather Forecast
ಮಳೆ10 hours ago

Karnataka Weather : ಚಿಕ್ಕಮಗಳೂರಲ್ಲಿ ಭಾರಿ ಮಳೆ; ಯಾದಗಿರಿಯಲ್ಲಿ ಕರೆಂಟ್‌ ಕಟ್‌, ಜನರೇಟರ್‌ನಿಂದ ಮೊಬೈಲ್‌ಗಳಿಗೆ ಚಾರ್ಜಿಂಗ್‌!

tumkur murder
ತುಮಕೂರು19 hours ago

Tumkur Murder : ಮಗುವಿನ ಮುಂದೆಯೇ ಹೆಂಡತಿಯ ಕತ್ತು, ದೇಹವನ್ನು ಕತ್ತರಿಸಿ ಬಿಸಾಡಿದ ದುಷ್ಟ

Karnataka Weather Forecast
ಮಳೆ2 days ago

Karnataka Weather : ಕಡಲತೀರದಲ್ಲಿ ಅಲೆಗಳ ಅಬ್ಬರ, ಪ್ರವಾಸಿಗರಿಗೆ ಕಟ್ಟೆಚ್ಚರ; ನಾಳೆಯೂ ಗಾಳಿ ಸಹಿತ ಮಳೆ ಅಬ್ಬರ

Karnataka Rain
ಮಳೆ3 days ago

Karnataka Rain : ಯಾದಗಿರಿಯಲ್ಲಿ ಬಿರುಗಾಳಿ ಸಹಿತ ಮಳೆ; ಸಿಡಿಲು ಬಡಿದು ಎಮ್ಮೆಗಳು ಸಾವು

Basavanagudi News
ಬೆಂಗಳೂರು3 days ago

Basavanagudi News : ಪೂಜಾ ಸಾಮಗ್ರಿಗೆ ಒನ್‌ ಟು ಡಬಲ್‌ ರೇಟ್‌; ದೊಡ್ಡ ಗಣಪತಿ ದೇಗುಲದಲ್ಲಿ ಕೈ ಕೈ ಮಿಲಾಯಿಸಿದ ಭಕ್ತರು-ವ್ಯಾಪಾರಿಗಳು

Karnataka Rain
ಮಳೆ4 days ago

Karnataka Rain : ಭಾರಿ ಮಳೆಗೆ ರಸ್ತೆ ಕಾಣದೆ ರಾಜಕಾಲುವೆಗೆ ಉರುಳಿದ ಆಟೋ; ಚಾಲಕ ಸ್ಥಳದಲ್ಲೇ ಸಾವು

dina bhavishya read your daily horoscope predictions for May 23 2024
ಭವಿಷ್ಯ6 days ago

Dina Bhavishya : 12 ರಾಶಿಯವರ ಇಂದಿನ ಭವಿಷ್ಯ ಹೇಗಿದೆ? ಯಾರಿಗೆ ಶುಭ, ಯಾರಿಗೆ ಅಶುಭ ಫಲ?

Karnataka Weather Forecast
ಮಳೆ7 days ago

Karnataka Weather : ಮುಂದುವರಿಯಲಿದೆ ವರುಣಾರ್ಭಟ; ಬೆಂಗಳೂರಲ್ಲೂ ಭಾರಿ ಮಳೆ ನಿರೀಕ್ಷೆ!

Karnataka Rain
ಮಳೆ1 week ago

Karnataka Rain : ಭಾರಿ ಮಳೆಗೆ ಕರೆಂಟ್‌ ಕಟ್‌, ಕತ್ತಲಲ್ಲೇ ರೋಗಿಗಳಿಗೆ ಟ್ರೀಟ್‌ಮೆಂಟ್‌; ಮರ ಬಿದ್ದರೂ ಪಾರಾದ ತಾಯಿ-ಮಗ

Love Case Father throws hot water on man who loved his daughter for coming home
ಕೊಡಗು1 week ago

Love Case : ಮನೆಗೆ ಬಂದ ಪ್ರೇಮಿಗೆ ಕೊತ ಕೊತ ಕುದಿಯುವ ನೀರು ಎರಚಿದ ಯುವತಿ ತಂದೆ!

ಟ್ರೆಂಡಿಂಗ್‌