Vijayanagara News G 20 summit in Hampi from July 9 More than 200 delegates participated says DC Venkatesh Vijayanagara News: ಹಂಪಿಯಲ್ಲಿ ಜು.9ರಿಂದ ಜಿ 20 ಶೃಂಗಸಭೆ; 200ಕ್ಕೂ ಅಧಿಕ ಪ್ರತಿನಿಧಿಗಳು ಭಾಗಿ: ಡಿಸಿ ವೆಂಕಟೇಶ್ - Vistara News

ಕರ್ನಾಟಕ

Vijayanagara News: ಹಂಪಿಯಲ್ಲಿ ಜು.9ರಿಂದ ಜಿ 20 ಶೃಂಗಸಭೆ; 200ಕ್ಕೂ ಅಧಿಕ ಪ್ರತಿನಿಧಿಗಳು ಭಾಗಿ: ಡಿಸಿ ವೆಂಕಟೇಶ್

Vijayanagara News: ವಿಶ್ವವಿಖ್ಯಾತ ಹಂಪಿಯಲ್ಲಿ ಜಿ-20 ಸಭೆ ನಡೆಯುವುದರಿಂದ ಇಲ್ಲಿನ ಸಂಸ್ಕೃತಿ, ಉತ್ಪನ್ನ, ಶಿಲ್ಪಕಲೆ ಮತ್ತು ಪ್ರವಾಸಿ ತಾಣಗಳ ಜಾಗತಿಕ ಪರಿಚಯಕ್ಕೆ ಸದಾವಕಾಶ ಲಭಿಸುತ್ತಿದ್ದು, ಈ ಹಿನ್ನೆಲೆಯಲ್ಲಿ ಅತ್ತುನ್ನತ ಮಟ್ಟದ ಸಭೆ ಯಶಸ್ವಿಗೆ ಅಗತ್ಯವುಳ್ಳ ಎಲ್ಲ ಮೂಲಭೂತ ಸೌಲಭ್ಯ ಒದಗಿಸಲಾಗುತ್ತಿದೆ ಎಂದು ಜಿಲ್ಲಾಧಿಕಾರಿ ವೆಂಕಟೇಶ್ ಟಿ. ತಿಳಿಸಿದ್ದಾರೆ.

VISTARANEWS.COM


on

Vijayanagara DC Venkatesh latest pressmeet
ವಿಜಯನಗರ ಜಿಲ್ಲಾಧಿಕಾರಿಗಳ ಕಚೇರಿ ಸಭಾಂಗಣದಲ್ಲಿ ನಡೆದ ಪತ್ರಿಕಾಗೋಷ್ಠಿಯಲ್ಲಿ ಜಿಲ್ಲಾಧಿಕಾರಿ ವೆಂಕಟೇಶ್ ಟಿ. ಮಾತನಾಡಿದರು.
ಮಹತ್ವದ, ಕುತೂಹಲಕರ ಸುದ್ದಿಗಾಗಿ ಫಾಲೊ ಮಾಡಿ
Koo

ವಿಜಯನಗರ: ಜು.9 ರಿಂದ 16 ರವರೆಗೆ ವಿಶ್ವವಿಖ್ಯಾತ ಹಂಪಿಯಲ್ಲಿ (Hampi) ನಡೆಯಲಿರುವ ಜಿ-20 ಶೃಂಗಸಭೆ (G-20 summit) ಎರಡು ಹಂತದಲ್ಲಿ ನಡೆಯಲಿದೆ. ಈ ಸಭೆಯಲ್ಲಿ ವಿವಿಧ ರಾಷ್ಟ್ರಗಳ ಅತ್ಯುನ್ನತ ಮಟ್ಟದ ಪ್ರತಿನಿಧಿಗಳು (Delegates) ಪಾಲ್ಗೊಳ್ಳಲಿದ್ದು, ಜಿಲ್ಲಾಡಳಿತದಿಂದ ಅಚ್ಚುಕಟ್ಟಾದ ಮೂಲಭೂತ ಸೌಕರ್ಯ ಒದಗಿಸಲಾಗುತ್ತಿದೆ ಎಂದು ಜಿಲ್ಲಾಧಿಕಾರಿ ವೆಂಕಟೇಶ್ ಟಿ. ತಿಳಿಸಿದರು.

ಜಿಲ್ಲಾಧಿಕಾರಿಗಳ ಕಚೇರಿ ಸಭಾಂಗಣದಲ್ಲಿ ನಡೆದ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, ಕೇಂದ್ರ ಸರ್ಕಾರದ ವಿದೇಶಾಂಗ ವ್ಯವಹಾರ, ಸಂಸ್ಕೃತಿ ಸಚಿವಾಲಯವು ಜಿ-20 ಸಭೆಯ ಎಲ್ಲ ಉಸ್ತುವಾರಿ ನೋಡಿಕೊಳ್ಳಲಿದೆ. ರಾಜ್ಯ ಪ್ರವಾಸೋದ್ಯಮವು ಜಿ-20ಗೆ ನೋಡಲ್ ಇಲಾಖೆಯಾಗಿ ಕಾರ್ಯನಿರ್ವಹಿಸುತ್ತಿದೆ ಮತ್ತು ಜಿಲ್ಲಾಡಳಿತದಿಂದ ಅಗತ್ಯವಿರುವ ಎಲ್ಲ ಮೂಲಭೂತ ಸೌಕರ್ಯ ಒದಗಿಸಲಾಗಿದೆ ಎಂದು ಜಿಲ್ಲಾಧಿಕಾರಿ ವೆಂಕಟೇಶ್ ಟಿ.‌ ಮಾಹಿತಿ ನೀಡಿದರು.

ಇದನ್ನೂ ಓದಿ: Rain News : ತುಂಡಾಗಿ ಬಿದ್ದಿದ್ದ ತಂತಿ ತಗುಲಿ ವೃದ್ಧೆ ಸಾವು; ನ್ಯಾಯಕ್ಕಾಗಿ ಶವ ಎತ್ತಲು ಬಿಡದ ರೈತರು

ವಿಶ್ವವಿಖ್ಯಾತ ಹಂಪಿಯಲ್ಲಿ ಜಿ-20 ಸಭೆ ನಡೆಯುವುದರಿಂದ ಇಲ್ಲಿನ ಸಂಸ್ಕೃತಿ, ಉತ್ಪನ್ನ, ಶಿಲ್ಪಕಲೆ ಮತ್ತು ಪ್ರವಾಸಿ ತಾಣಗಳ ಜಾಗತಿಕ ಪರಿಚಯಕ್ಕೆ ಸದಾವಕಾಶ ಲಭಿಸುತ್ತಿದ್ದು, ಈ ಹಿನ್ನೆಲೆಯಲ್ಲಿ ಅತ್ಯುನ್ನತ ಮಟ್ಟದ ಸಭೆ ಯಶಸ್ಸಿಗೆ ಅಗತ್ಯವುಳ್ಳ ಎಲ್ಲ ಮೂಲಭೂತ ಸೌಲಭ್ಯ ಒದಗಿಸಲಾಗುತ್ತಿದೆ ಎಂದು ತಿಳಿಸಿದರು.

ಹಂಪಿಯಲ್ಲಿ ಶಾಶ್ವತ ಆದ್ಯತೆಯೊಂದಿಗೆ ಮೂಲಸೌಕರ್ಯ

ಹಂಪಿಯಲ್ಲಿ ಸಭೆ ಸೇರಿದಂತೆ ಸಾಂಸ್ಕೃತಿಕ ಕಾರ್ಯಕ್ರಮಗಳು ಜೊತೆಯಲ್ಲಿಯೇ ಪ್ರವಾಸಿಗರ ಅನುಕೂಲಕ್ಕೂ ದೂರದೃಷ್ಟಿ ವಹಿಸಿ ರಸ್ತೆ, ಕುಡಿಯುವ ನೀರು ಸೇರಿದಂತೆ ಇತರ ಮೂಲಸೌಕರ್ಯಗಳು ಶಾಶ್ವತವಾಗಿ ನಿರ್ಮಿಸಲಾಗುತ್ತಿದೆ. ಇದಲ್ಲದೇ ಹಂಪಿ ಸೇರಿದಂತೆ ಸುತ್ತಮುತ್ತಲಿನ ಪ್ರಮುಖ ಸ್ಥಳಗಳಲ್ಲಿ ಸ್ವಚ್ಛತೆಯನ್ನು 400ಕ್ಕೂ ಹೆಚ್ಚು ಕಾರ್ಮಿಕರ ನೇತೃತ್ವದಲ್ಲಿ ಕೈಗೊಳ್ಳಲಾಗಿದೆ ಎಂದರು.

ಸಭೆ, ಸಾಂಸ್ಕೃತಿಕ ಕಾರ್ಯಕ್ರಮ, ಯೋಗ

ಜು.9 ರಿಂದ 12 ರವರೆಗೆ ಸಾಂಸ್ಕೃತಿಕ ಕಾರ್ಯ ತಂಡಗಳ ಸಭೆ ನಡೆಯಲಿದೆ. ಜು.13 ರಿಂದ 16 ರವರೆಗೆ ಉನ್ನತ ಮಟ್ಟದ ಪ್ರತಿನಿಧಿಗಳ (ಶೆರ್ಪಾ) ಸಭೆ ನಡೆಯಲಿದೆ. ಸಭೆಯನ್ನು ಕಮಲಾಪುರ ಸಮೀಪದ ಖಾಸಗಿ ಹೋಟೆಲ್‌ನಲ್ಲಿ ಆಯೋಜಿಸಲಾಗುತ್ತದೆ. ಸಭೆಯ ನಂತರ ಆಗಮಿಸಿರುವ ಜಿ-20 ಪ್ರತಿನಿಧಿಗಳಿಗೆ ಸಾಂಸ್ಕೃತಿಕ ಕಲಾ ಪ್ರದರ್ಶನ ಹಾಗೂ ಹಂಪಿ ಪ್ರಮುಖ ಸ್ಮಾರಕಗಳ ದರ್ಶನ ಹಾಗೂ ಸ್ಥಳೀಯ ಸಾಂಪ್ರದಾಯಿಕ ಶುದ್ಧ ಸಾತ್ವಿಕ ಔತಣಕೂಟ ಆಯೋಜಿಸಲಾಗುತ್ತದೆ. ಇದರ ಜತೆಗೆ ಹಂಪಿಯ ಸ್ಮಾರಕದ ಬಳಿ ಯೋಗಾಭ್ಯಾಸ ಹಾಗೂ ತುಂಗಾಭದ್ರಾ ನದಿಯಲ್ಲಿ ಹರಿಗೋಲು ಸವಾರಿ ಆಯೋಜಿಸಲಾಗುತ್ತದೆ ಎಂದು ಜಿಲ್ಲಾಧಿಕಾರಿ ವೆಂಕಟೇಶ್‌ ತಿಳಿಸಿದರು.

ಜಿ-20 ಸಭೆಯಲ್ಲಿ ಒಟ್ಟು 52 ಮಂದಿ ಉನ್ನತ ಮಟ್ಟದ ಪ್ರತಿನಿಧಿಗಳು ಸೇರಿದಂತೆ ಒಟ್ಟು 200ಕ್ಕೂ ಹೆಚ್ಚು ಪ್ರತಿನಿಧಿಗಳು ಭಾಗಿಯಾಗಲಿದ್ದಾರೆ ಎಂದು ಮಾಹಿತಿ ನೀಡಿದರು.

ಇದನ್ನೂ ಓದಿ: Road Accident: ಬಸ್​-ಕ್ರೂಸರ್​ ಮುಖಾಮುಖಿ ಡಿಕ್ಕಿ; 8 ಪ್ರಯಾಣಿಕರ ದುರ್ಮರಣ

ಪ್ರವಾಸಿಗರಿಗೆ ಯಾವುದೇ ನಿರ್ಬಂಧವಿಲ್ಲ

ಜಿ-20 ಸಭೆಗಳಿಗೆ ಭಾಗಿಯಾಗಲಿರುವ ಉನ್ನತ ಪ್ರತಿನಿಧಿಗಳು ಸ್ಮಾರಕಗಳಿಗೆ ಭೇಟಿ ನೀಡಲಿರುವ ಸಂದರ್ಭದಲ್ಲಿ ಮಾತ್ರ ಆಯಾ ಸ್ಮಾರಕದ ಪ್ರದೇಶದಲ್ಲಿ ಪ್ರವಾಸಿಗರಿಗೆ ನಿರ್ಬಂಧಿಸಲಾಗುತ್ತದೆ. ಉಳಿದಂತೆ ಹಂಪಿ ವೀಕ್ಷಣೆಗೆ ಪ್ರವಾಸಿಗರಿಗೆ ಯಾವುದೇ ನಿರ್ಬಂಧವಿರುವುದಿಲ್ಲ ಎಂದು ಸ್ಪಷ್ಟಪಡಿಸಿದರು.

4 ಹೆಚ್ಚುವರಿ ಎಸ್ಪಿ ಸೇರಿದಂತೆ 1074 ಪೊಲೀಸ್ ಸಿಬ್ಬಂದಿ ನಿಯೋಜನೆ

ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಶ್ರೀಹರಿ ಬಾಬು ಬಿ.ಎಲ್. ಮಾತನಾಡಿ, ಹಂಪಿಯಲ್ಲಿ ನಡೆಯುವ ಜಿ-20 ಸಭೆಗಳಿಗೆ ಸಂಬಂಧಿಸಿದಂತೆ ಹಂಪಿ ಸೇರಿ ಸುತ್ತಮುತ್ತಲಿನ ಪ್ರದೇಶಗಳಲ್ಲಿ ಒಟ್ಟು 1,074 ಪೊಲೀಸ್ ಸಿಬ್ಬಂದಿ ನಿಯೋಜಿಸಲಾಗಿದೆ ಎಂದು ಮಾಹಿತಿ ನೀಡಿದರು.

ಒಬ್ಬರು ಎಸ್.ಪಿ 4 ಜನ ಹೆಚ್ಚುವರಿ ಎಸ್ಪಿ ಸೇರಿದಂತೆ 9 ಜನ ಡಿವೈಎಸ್ಪಿ, 35 ಜನ ಸಿಪಿಐ, 79 ಜನ ಪಿಎಸ್‌ಐ, 139 ಜನ ಎಎಸ್‌ಐ, 1074 ಜನ ಪೊಲೀಸ್ ಸಿಬ್ಬಂದಿಯನ್ನು ನಿಯೋಜಿಸಲಾಗಿದೆ ಎಂದರು. ಇದರ ಜತೆಗೆ ಗರುಡ, ಬಿಡಿಡಿಎಸ್, ಕ್ಯೂಆರ್‌ಟಿ ತಂಡ ಮತ್ತು 6 ಡಿಎಆರ್ ಮತ್ತು 2 ಕೆಎಸ್‌ಆರ್‌ಪಿ ತುಕಡಿಗಳನ್ನು ಭದ್ರತೆ, ಸುಗಮ ಸಂಚಾರ ಹಾಗೂ ಇತರ ಕರ್ತವ್ಯಕ್ಕಾಗಿ ನಿಯೋಜಿಸಲಾಗಿದೆ ಎಂದರು.

ಇದನ್ನೂ ಓದಿ: Rocking Star Yash: ಮಲೇಷ್ಯಾಗೆ ಹಾರಿದ ಯಶ್‌; ನಟನಿಗೆ ಅದ್ಧೂರಿ ಸ್ವಾಗತ? ಹೋಗಿದ್ದೇಕೆ?

ಭದ್ರತಾ ಹಿತದೃಷ್ಟಿಯಿಂದ ಡ್ರೋನ್ ಹಾರಾಟಕ್ಕೆ ನಿಷೇಧಾಜ್ಞೆ ಜಾರಿಗೊಳಿಸಲಾಗಿದೆ. ಭುವನಹಳ್ಳಿ ಭಾಗದಿಂದ ಹಂಪಿ ಪ್ರದೇಶದವರೆಗೂ ಸಿಸಿ ಕ್ಯಾಮೆರಾ ಅಳವಡಿಸಲಾಗಿದೆ ಎಂದರು. ಈ ಸಂದರ್ಭದಲ್ಲಿ ಅಪರ ಜಿಲ್ಲಾಧಿಕಾರಿ ಅನುರಾಧ, ಎಸಿ ಸಿದ್ದರಾಮೇಶ್ವರ ಉಪಸ್ಥಿತರಿದ್ದರು.

ಕ್ಷಣ ಕ್ಷಣದ ಮಾಹಿತಿಗಾಗಿ Vistara News FaceBook ಪೇಜ್ ಫಾಲೋ ಮಾಡಿ
ಮಹತ್ವದ ಮಾಹಿತಿಗಾಗಿ ವಿಸ್ತಾರ ನ್ಯೂಸ್ ಆ್ಯಪ್ ಉಚಿತವಾಗಿ ಡೌನ್ ಲೋಡ್ ಮಾಡಿಕೊಳ್ಳಿ: Andriod App | IOS App

ಪ್ರಮುಖ ಸುದ್ದಿ

Actor Darshan Arrested : ದರ್ಶನ್​ಗೆ ಪೊಲೀಸ್ ಠಾಣೆಯಲ್ಲಿ ರಾಜಾತಿಥ್ಯ; ಚಿಕ್ಕಪೇಟೆ ಬಿರಿಯಾನಿ, ಡೋಲೊ 650!

VISTARANEWS.COM


on

Actor Darshan Arrested
Koo

ಬೆಂಗಳೂರು : ತನ್ನ ಅಭಿಮಾನಿ ರೇಣುಕಾ ಸ್ವಾಮಿ ಎಂಬುವರನ್ನು ಅಮಾನುಷವಾಗಿ ಕೊಲೆ ಮಾಡಿರುವ ಪ್ರಕರಣದಲ್ಲಿ ಪೊಲೀಸ್​​ ಕಸ್ಟಡಿಯಲ್ಲಿರುವ ನಟ ದರ್ಶನ್ (Actor Darshan Arrested) ಹಾಗೂ ಆತನ ಸಹಚರರಿಗೆ ಕಾಮಾಕ್ಷಿ ಪಾಳ್ಯ ಪೊಲೀಸರು ಮಂಗಳವಾರ ರಾತ್ರಿಯ ಊಟಕ್ಕೆ ಚಿಕ್ಕಪೇಟೆ ಬಿರಿಯಾನಿ ತಂದುಕೊಟ್ಟಿದ್ದಾರೆ. ಪ್ರಕರಣದಲ್ಲಿ ದರ್ಶನ್​ ಮತ್ತು ಪವಿತ್ರಾ ಗೌಡ ಸೇರಿದಂತೆ ಒಟ್ಟು 17 ಆರೋಪಿಗಳಿದ್ದಾರೆ. ಅವರೆಲ್ಲರನ್ನೂ ನ್ಯಾಯಾಲಯ ಪೊಲೀಸರ ಕಸ್ಟಡಿಗೆ ನೀಡಿದೆ. ಪವಿತ್ರಾ ಸಾಂತ್ವನ ಕೇಂದ್ರದಲ್ಲಿ ಇದ್ದರೆ ಉಳಿದವರು ಕಾಮಾಕ್ಷಿಪಾಳ್ಯ ಪೊಲೀಸರ ವಶದಲ್ಲಿದ್ದಾರೆ. ರಾತ್ರಿಯ ಊಟಕ್ಕೆ ಪೊಲೀಸರು ಅವರೆಲ್ಲರಿಗೂ ಚಿಕ್ಕಪೇಟೆ ಬಿರಿಯಾನಿ ಪ್ಯಾಕೇಟ್​ಗಳನ್ನು ತೆಗೆದುಕೊಂಡು ಹೋಗಿರುವ ದೃಶ್ಯಗಳು ಸೆರೆಯಾಗಿವೆ.

ದೊಡ್ಡ ಪ್ರಮಾಣದಲ್ಲಿ ಬಿರಿಯಾನಿ ಪ್ಯಾಕೆಟ್​ಗಳನ್ನು ಕ್ಯಾರಿ ಬ್ಯಾಗ್​ನಲ್ಲಿ ತುಂಬಿಸಿಕೊಂಡು ಹೋಗಿದ್ದು, ಜತೆಗೆ ಎಲ್ಲರಿಗೂ ಮಿನರಲ್ ವಾಟರ್​ ನೀಡಲಾಗಿದೆ. ಆರೋಪಿಗಳು ಕೆಲವರು ಬೆಳಗ್ಗಿನಿಂದ ಬಂಧನ ಹಾಗೂ ಇನ್ನಿತರ ಕಾನೂನು ಪ್ರಕ್ರಿಯೆಗಳ ಹಿನ್ನೆಲೆಯಲ್ಲಿ ಮೈಕೈ ನೋವು, ತಲೆ ನೋವು ಎಂದಿದ್ದು ಅವರೆಲ್ಲರಿಗೂ ಡೋಲೋ 650 ಮಾತ್ರೆಯನ್ನೂ ತಂದಕೊಟ್ಟಿದ್ದಾರೆ.

ಆರೋಪಿ ಚಿತ್ರನಟ ಹಾಗೂ ಇದು ರಾಜ್ಯಾದ್ಯಂತ ಸಂಚಲನ ಮೂಡಿಸಿರುವ ಪ್ರಕರಣವಾಗಿರುವ ಕಾರಣ ತಮ್ಮ ವಶದಲ್ಲಿರುವ ಆರೋಪಿಗಳನ್ನು ಸರಿಯಾಗಿ ನೋಡಿಕೊಳ್ಳುವುದು ಪೊಲೀಸರಿಗೆ ಅನಿವಾರ್ಯ. ಹೀಗಾಗಿ ಅವರ ಊಟ, ತಿಂಡಿ ಹಾಗೂ ಇನ್ನಿತರ ಉಪಚಾರಗಳನ್ನು ಮಾಡಲು ಪೊಲೀಸರ ತಂಡ ನಾನಾ ರೀತಿಯ ಶ್ರಮಗಳನ್ನು ಹಾಕುತ್ತಿದೆ.

ಹಾಸಿಗೆ, ತಲೆದಿಂಬು

ಆರೋಪಿ ನಂಬರ್ 1 ದರ್ಶನ್ ಹಾಗೂ ಉಳಿದ ಆರೋಪಿಗಳಿಗೆ ಪೊಲೀಸರು ರಾತ್ರಿ ವೇಳೆ ಮಲಗಲು ಹಾಸಿಗೆ ಹಾಗೂ ತಲೆ ದಿಂಬು ವ್ಯವಸ್ಥೆಯನ್ನೂ ಮಾಡಿದ್ದಾರೆ. 9 ಗಂಟೆ ವೇಳೆಗೆ ಪೊಲೀಸರು ನಾನಾ ಕಡೆಯಿಂದ ಆರೋಪಿಗಳೆಲ್ಲರಿಗೂ ಮಲಗಲು ಕಾರ್ಪೆಟ್​, ಬೆಡ್​ಶೀಟ್​ ಹಾಗೂ ತಲೆ ದಿಂಬಿನ ವ್ಯವಸ್ಥೆ ಮಾಡಿದ್ದಾರೆ. ಆರು ದಿನಗಳ ಕಾಲ ತಮ್ಮ ವಶಕ್ಕೆ ಪಡೆದಿರುವ ಪೊಲೀಸರಿಗೆ ಮುಂದಿನ ನ್ಯಾಯಾಲಯಕ್ಕೆ ಹಾಜರುಪಡಿಸುವ ಪ್ರಕ್ರಿಯೆ ನಡುವೆ ಇಷ್ಟೊಂದು ವ್ಯವಸ್ಥೆಗಳನ್ನು ಮಾಡಲೇಬೇಕಾಗುತ್ತದೆ.

ಇದನ್ನೂ ಓದಿ: Pavithra Gowda: ಬಂಧನದ ಭಯವಿಲ್ಲದೇ ನಗುತ್ತಾ ಸಾಂತ್ವನ ಕೇಂದ್ರಕ್ಕೆ ಹೋದ ಪವಿತ್ರಾ ಗೌಡ!

ಏತನ್ಮಧ್ಯೆ, ಆರೋಪಿ ನಂಬರ್​ 2 ಪವಿತ್ರಾಗೌಡ ಸಾಂತ್ವನ ಕೇಂದ್ರದಲ್ಲಿ ಉಳಿದುಕೊಂಡಿದ್ದಾರೆ. ಪೊಲೀಸರು ಅವರನ್ನು ಅಲ್ಲಿಗೆ ಜೀಪ್​ನಲ್ಲಿ ಕರೆದುಕೊಂಡು ಹೋಗಿ ಬಿಡುತ್ತಿದ್ದಂತೆ ನಗುನಗುತ್ತಾ ಅವರು ಸಾಂತ್ವನ ಕೇಂದ್ರ ಸೇರಿಕೊಂಡಿದ್ದಾರೆ. ನಡೆದ ಘಟನೆಗೂ ತಮಗೂ ಯಾವುದೇ ಸಂಬಂಧ ಇಲ್ಲ ಎನ್ನುವಂತೆ ಅವರು ಕೇಂದ್ರ ಸೇರಿಕೊಂಡಿದ್ದಾರೆ.

ಕೊಲೆಗೆ ಕಾರಣ

ರೇಣುಕಾಸ್ವಾಮಿ ಪವಿತ್ರಗೌಡಗೆ ಮೆಸೇಜ್ ಮಾಡುತ್ತಿದ್ದ. ಈ ವಿಷಯ ತಿಳಿದು ದರ್ಶನ್ ಆಪ್ತರು ನಕಲಿ ಅಕೌಂಟ್ ತೆರೆದಿದ್ದರು. ಬಳಿಕ ರೇಣುಕಾಸ್ವಾಮಿ ಜತೆ ಚಾಟಿಂಗ್ ನಡೆಸಲಾಗಿತ್ತು. ಬಳಿಕ ಚಿತ್ರದುರ್ಗದಿಂದ ರೇಣುಕಾಸ್ವಾಮಿಯನ್ನು ಕಿಡ್ನಾಪ್ ಮಾಡಿಕೊಂಡು ಬಂದು ಹಲ್ಲೆ ನಡೆಸಲಾಗಿತ್ತು. ಈ ವೇಳೆ ಆತ ಸಾವನ್ನಪ್ಪಿದ್ದ. ಆತ ಮೃತಪಟ್ಟಿರುವುದು ಗೊತ್ತಾಗುತ್ತಿದ್ದಂತೆ ದರ್ಶನ್‌ ಆಪ್ತರು ಸ್ಕಾರ್ಪಿಯೋ ಕಾರಿನಲ್ಲಿ ಶವವನ್ನು ತಂದು ಬಿಸಾಡಿ ಹೋಗಿದ್ದರು. ಬಳಿಕ ಪೊಲೀಸರಿಗೆ ಕಾಲ್‌ ಮಾಡಿ ತಪ್ಪಾಗಿದೆ ಸರ್ ಅಂದಿದ್ದರು. ಬಳಿಕ ಬಂದು ಮೂವರು ಪೊಲೀಸರ ಮುಂದೆ ಶರಣಾಗಿದ್ದರು ಎನ್ನಲಾಗಿದೆ.

ದರ್ಶನ್‌ ಅವರನ್ನು ಪೊಲೀಸರು ಬಂಧಿಸಿದ ಬೆನ್ನಲ್ಲೇ ನಟ ದರ್ಶನ್‌ ಅವರ ಗೆಳತಿಯೂ ಆದ ನಟಿ (Pavithra Gowda) ಅವರನ್ನೂ ಪೊಲೀಸರು ವಶಪಡಿಸಿಕೊಂಡಿದ್ದಾರೆ. ರೇಣುಕಾಸ್ವಾಮಿ ಹತ್ಯೆಯ ಹಿಂದೆ ಒಳಸಂಚು ರೂಪಿಸಿದ ಆರೋಪದಲ್ಲಿ ಬೆಂಗಳೂರಿನ ಅನ್ನಪೂರ್ಣೇಶ್ವರ ನಗರ ಠಾಣೆಯ ಪೊಲೀಸರು ವಶಪಡಿಸಿಕೊಂಡು ತನಿಖೆ ನಡೆಸುತ್ತಿದ್ದಾರೆ.

ರೇಣುಕಾಸ್ವಾಮಿ ಯಾರು?

ಚಿತ್ರದುರ್ಗ ಮೂಲದವನಾದ ರೇಣುಕಾಸ್ವಾಮಿ ಎಂಬ 28 ವರ್ಷದ ಯುವಕನು ಮೆಡಿಕಲ್‌ ಶಾಪ್‌ನಲ್ಲಿ ಕೆಲಸ ಮಾಡುತ್ತಿದ್ದ. ಬೆಂಗಳೂರಿನಲ್ಲಿ ಕೆಲಸ ಮಾಡುತ್ತಿದ್ದ ಈತನು ಪವಿತ್ರಾ ಗೌಡ ಅವರಿಗೆ ಅಶ್ಲೀಲವಾಗಿ ಮೆಸೇಜ್‌ ಕಳುಹಿಸಿದ್ದ ಎನ್ನಲಾಗಿದೆ. ಇದೇ ಕಾರಣಕ್ಕೆ ದರ್ಶನ್‌ ಹಾಗೂ ಅವರ ಆಪ್ತರು ಹಲ್ಲೆ ನಡೆಸಿದ್ದಾರೆ ಎಂದು ತಿಳಿದುಬಂದಿದೆ. ದರ್ಶನ್‌ ಸೇರಿ 10 ಮಂದಿಯನ್ನು ಪೊಲೀಸರು ಬಂಧಿಸಿ, ವಿಚಾರಣೆ ನಡೆಸುತ್ತಿದ್ದಾರೆ. ರೇಣುಕಾಸ್ವಾಮಿಗೆ ಕಳೆದ ವರ್ಷವೇ ಸಹನಾ ಎಂಬ ಯುವತಿ ಜತೆ ಮದುವೆಯಾಗಿದೆ ಎಂದು ಹೇಳಲಾಗುತ್ತಿದೆ. ರೇಣುಕಾಸ್ವಾಮಿ ಕೂಡ ದರ್ಶನ್‌ ಅಭಿಮಾನಿಯಾಗಿದ್ದ ಎನ್ನಲಾಗಿದೆ.

Continue Reading

ಕರ್ನಾಟಕ

Pavithra Gowda: ಬಂಧನದ ಭಯವಿಲ್ಲದೇ ನಗುತ್ತಾ ಸಾಂತ್ವನ ಕೇಂದ್ರಕ್ಕೆ ಹೋದ ಪವಿತ್ರಾ ಗೌಡ!

Pavithra Gowda: ರೇಣುಕಾಸ್ವಾಮಿ ಹತ್ಯೆ ಪ್ರಕರಣದಲ್ಲಿ ನಟ ದರ್ಶನ್‌, ಪವಿತ್ರಾ ಗೌಡ ಸೇರಿ 13 ಆರೋಪಿಗಳಿಗೆ 6 ದಿನಗಳ ಕಾಲ ಪೊಲೀಸ್‌ ಕಸ್ಟಡಿ ವಿಧಿಸಲಾಗಿದೆ. ಈ ಹಿನ್ನೆಲೆಯಲ್ಲಿ ಆರೋಪಿ ಪವಿತ್ರಾ ಗೌಡಳನ್ನು ಮಹಿಳಾ ಸಾಂತ್ವನ ಕೇಂದ್ರಕ್ಕೆ ರವಾನಿಸಲಾಗಿದೆ.

VISTARANEWS.COM


on

Pavithra Gowda
Koo

ಬೆಂಗಳೂರು: ರೇಣುಕಾಸ್ವಾಮಿ ಹತ್ಯೆ ಪ್ರಕರಣದಲ್ಲಿ ನಟ ದರ್ಶನ್‌, ಪವಿತ್ರಾ ಗೌಡ (Pavithra Gowda) ಸೇರಿ 13 ಆರೋಪಿಗಳನ್ನು ಪೊಲೀಸ್‌ ಕಸ್ಟಡಿಗೆ ನೀಡಲು ನ್ಯಾಯಾಲಯ ಆದೇಶಿಸಿದೆ. ಹೀಗಾಗಿ ಎ1 ಪವಿತ್ರಾ ಗೌಡಳನ್ನು ಮಂಗಳವಾರ ರಾತ್ರಿ ಸಾಂತ್ವನ ಕೇಂದ್ರಕ್ಕೆ ಕರೆದೊಯ್ಯಲಾಯಿತು. ಈ ವೇಳೆ ಜೀಪ್‌ನಿಂದ ಇಳಿಯುವಾಗ ಯಾವುದೇ ರೀತಿಯ ಭಯವಿಲ್ಲದೇ ಪವಿತ್ರಾ ಗೌಡ ನಗುನಗುತ್ತಾ ಸಾಂತ್ವನ ಕೇಂದ್ರದ ಒಳ ಹೋಗಿದ್ದು ಕಂಡುಬಂದಿದೆ.

ಆರೋಪಿಗಳಿಗೆ 6 ದಿನಗಳ ಕಾಲ ಕಸ್ಟಡಿ ವಿಧಿಸಿದ ಹಿನ್ನೆಲೆಯಲ್ಲಿ ಆರೋಪಿಯನ್ನು ಮಹಿಳಾ ಸಾಂತ್ವನ ಕೇಂದ್ರಕ್ಕೆ ರವಾನಿಸಲಾಯಿತು. ಈ ವೇಳೆ ಕ್ಯಾಮೆರಾಗಳ ಕಣ್ಣಿಗೆ ಬೀಳದಂತೆ ಮುಖಕ್ಕೆ ಅಡ್ಡಲಾಗಿ ವಾಟರ್‌ ಬಾಟಲ್‌ ಹಿಡಿದು ಕಾರಿನಲ್ಲಿ ಪವಿತ್ರಾ ಗೌಡ ನಗುತ್ತಿದ್ದದ್ದು ಕಂಡುಬಂದಿದೆ. ನಂತರ ಯಾವುದೇ ಭಯವೇ ಇಲ್ಲದಂತೆ ನಗುತ್ತಾ ಸಾಂತ್ವನ ಕೇಂದ್ರದ ಒಳ ಹೋಗಿದ್ದಾಳೆ. ಸದ್ಯ ಈ ವಿಡಿಯೊ ವೈರಲ್‌ ಆಗಿದ್ದು, ಬಂಧನವಾದರೂ ಇವರಿಗೆ ಯಾವುದೇ ಆತಂಕ, ಭಯ ಇಲ್ಲ ಎಂದು ನೆಟ್ಟಿಗರು ಛೀಮಾರಿ ಹಾಕಿದ್ದಾರೆ.

ಇದನ್ನೂ ಓದಿ | Renuka Swamy Murder Case: ರೇಣುಕಾಸ್ವಾಮಿ ಕೊಲೆ ಕೇಸ್‌ ಖಂಡಿಸಿ ನಾಳೆ ಚಿತ್ರದುರ್ಗದಲ್ಲಿ ಬೃಹತ್‌ ಪ್ರತಿಭಟನೆ

ಪತಿ ಅರೆಸ್ಟ್​ ಆದರೂ ಪ್ರತಿಕ್ರಿಯೆ ನೀಡದ ದರ್ಶನ್​ ಪತ್ನಿ ವಿಜಯಲಕ್ಷ್ಮಿ!

Actor Darshan Arrested

ಬೆಂಗಳೂರು: ರೇಣುಕಾ ಸ್ವಾಮಿ ಕೊಲೆ ಪ್ರಕರಣದಲ್ಲಿ ನಟ ದರ್ಶನ್​ ಅರೆಸ್ಟ್ (Actor Darshan Arrested) ಆಗಿದ್ದರೂ ಅವರ ಪತ್ನಿ ವಿಜಯಲಕ್ಷ್ಮಿ ಇದುವರೆಗೆ ಒಂದೇ ಒಂದು ಪ್ರತಿಕ್ರಿಯೆ ನೀಡಿಲ್ಲ. ಪವಿತ್ರಾ ಗೌಡ ವಿಚಾರದಲ್ಲಿ ಆಗಾಗ ಸೋಶಿಯಲ್ ಮೀಡಿಯಾಗಳ ಮೂಲಕ ಯುದ್ಧ ಸಾರುತ್ತಿದ್ದ ವಿಜಯಲಕ್ಷ್ಮಿ ಅವರು ಈ ಬಾರಿ ಯಾವುದೇ ಪ್ರತಿಕ್ರಿಯೆ ನೀಡಿಲ್ಲ. ಈ ಪ್ರಕರಣದಲ್ಲಿ ಬಗ್ಗೆ ಅವರ ಅಭಿಪ್ರಾಯ ಏನು ಎಂಬುದು ಇನ್ನೂ ಸ್ಪಷ್ಟವಾಗಿಲ್ಲ. ಮಂಗಳವಾರ ಬೆಳಗ್ಗಿನಿಂದ ಪ್ರಕರಣ ರಾಜ್ಯಾದ್ಯಂತ ಹವಾ ಎಬ್ಬಿಸಿದ್ದು ಒಬ್ಬೊಬ್ಬರು ಒಂದೊಂದು ಪ್ರತಿಕ್ರಿಯೆ ನೀಡುತ್ತಿದ್ದಾರೆ. ದರ್ಶನ್​ ಅಭಿಮಾನಿಗಳಂತೂ ಈ ವಿಚಾರದಲ್ಲಿ ಭಾವುಕರಾಗಿದ್ದಾರೆ. ಆದರೆ ಪತಿ ಜೈಲಿಗೆ ಹೋಗುವ ಸ್ಥಿತಿ ತಂದುಕೊಂಡಿದ್ದರೂ ವಿಜಯಲಕ್ಷ್ಮೀ ಈ ಕುರಿತು ಏನೂ ಹೇಳಿಕೆಗಳನ್ನು ನೀಡಿಲ್ಲ.

ಪವಿತ್ರಾ ಗೌಡ ವಿಚಾರದಲ್ಲಿ ವಿಜಯಲಕ್ಷ್ಮೀ ಈ ಹಿಂದೆ ಸಾಕಷ್ಟು ಬಾರಿ ಸೋಶಿಯಲ್​ ಮೀಡಿಯಾ ವಾರ್ ನಡೆಸಿದ್ದರು. ಪವಿತ್ರಾ ವಿರುದ್ಧ ನಾನಾ ರೀತಿಯ ಹೇಳಿಕೆಗಳನ್ನು ನೀಡಿದ್ದರು. ದರ್ಶನ್​ ಕೊಲೆ ಅರೋಪದಲ್ಲಿ ಸಿಕ್ಕಿ ಹಾಕಿಕೊಂಡಿರುವುದ ಪವಿತ್ರಾ ಅವರ ವಿಚಾರದಲ್ಲಿ. ಹೀಗಾಗಿ ಅವರಿಗೆ ಸಹಜವಾಗಿಯೇ ಅಸಮಾಧಾನ ಉಂಟಾಗಿರುತ್ತದೆ. ಆದಾಗ್ಯೂ ಅವರು ಇನ್ನೂ ಪ್ರತಿಕ್ರಿಯೆ ಕೊಟ್ಟಿಲ್ಲ.

ದರ್ಶನ್​ಗೆ ಮರಣದಂಡನೆ ಶಿಕ್ಷೆಯಾಗಲಿ! ನಟಿ ರಮ್ಯಾ ಟ್ವೀಟ್‌

ಕೊಲೆ ಪ್ರಕರಣದಲ್ಲಿ ಪೊಲೀಸರ ವಶದಲ್ಲಿರುವ ನಟ ದರ್ಶನ್​ಗೆ (Actor Darshan) ಮರಣದಂಡನೆಯಾಗಲಿ ಎಂಬ ಆಶಯವನ್ನು ಸ್ಯಾಂಡಲ್​ವುಡ್​ ಕ್ವೀನ್​ ರಮ್ಯಾ ವ್ಯಕ್ತಪಡಿಸಿದ್ದಾರೆ! ಕೊಲೆ ಪ್ರಕರಣದ ಕುರಿತು ಎಕ್ಸ್​ನಲ್ಲಿ ಪೋಸ್ಟ್​​ ಮಾಡಿರುವ ರಮ್ಯಾ ಐಪಿಸಿ ಸೆಕ್ಷನ್​ 302ರನ್ನು ಉಲ್ಲೇಖಿಸಿ ಅದರ ಅನ್ವಯ ದರ್ಶನ್​ಗೆ ಕಠಿಣ ಶಿಕ್ಷೆಯಾಗಬಹುದು ಎಂದು ಅಭಿಪ್ರಾಯಪಟ್ಟಿದ್ದಾರೆ. ಕೊಲೆಯಾಗಿರುವ ವ್ಯಕ್ತಿಯ ಪರವಾಗಿ ನಿಂತಿರುವ ರಮ್ಯಾ, ದರ್ಶನ್​ಗೆ ಇಂಡಿಯನ್ ಪಿನಲ್​ ಕೋಡ್​ 302ರ ಪ್ರಕಾರ ಯಾವ ಪ್ರಕಾರಣದ ಶಿಕ್ಷೆಯಾಗುತ್ತದೆ ಎಂಬ ಬಗ್ಗೆ ಟ್ವೀಟ್ ಮಾಡಿದ್ದಾರೆ. ಈ ಸೆಕ್ಷನ್​ 302ರಲ್ಲಿ ಕೊಲೆ ಆರೋಪ ಸಾಬೀತಾದರೆ ಅವರಿಗೆ ಮರಣದಂಡನೆ ಅಥವಾ ಜೀವಾವಧಿ ಶಿಕ್ಷೆ ವಿಧಿಸಲಾಗುತ್ತದೆ ಎಂಬ ಮಾಹಿತಿ ಇರುವ ಪೋಸ್ಟ್‌ ಅನ್ನು ರಮ್ಯಾ ರೀಟ್ವೀಟ್‌ ಮಾಡಿದ್ದಾರೆ.

ಸೆಕ್ಷನ್ 302 ರ ಅಡಿಯಲ್ಲಿ ನಟ ದರ್ಶನ್​ಗೆ ಜೀವಾವಧಿ ಶಿಕ್ಷೆ ಅಥವಾ ಶಿಕ್ಷೆಯಾಗಬೇಕು. ಬೇರೆ ಯಾವುದೇ ಹಣದ ಪ್ರಭಾವ ಮತ್ತು ಭಾರತೀಯ ಕಾನೂನು ವ್ಯವಸ್ಥೆಯನ್ನು ಅಣಕಿಸುವಂತಾಗಬಾರದು. ಸಂತ್ರಸ್ತರ ಕುಟುಂಬಕ್ಕೆ ನ್ಯಾಯ ಸಿಗಬೇಕು ಎಂಬ ಟ್ವೀಟ್‌ ಅನ್ನು ರಮ್ಯಾ ಮರು ಪೋಸ್ಟ್‌ ಮಾಡಿದ್ದಾರೆ.

ಇದನ್ನೂ ಓದಿ: Actor Darshan: ರೇಣುಕಾ ಸ್ವಾಮಿ ಕೊಲೆ ಕೇಸ್‌ನಲ್ಲಿ ದರ್ಶನ್‌ ಅರೆಸ್ಟ್‌; ಪ್ರಕರಣವನ್ನು ಸಿಬಿಐಗೆ ವಹಿಸಲು ಒತ್ತಾಯ

ರಮ್ಯಾ ಈ ಹಿಂದೆಯೂ ಸ್ಟಾರ್ ನಟರ ನಡವಳಿಕೆಯ ಬಗ್ಗೆ ಆಕ್ಷೇಪ ಎತ್ತಿದ್ದರು. ಹಿಂದೆ ದರ್ಶನ್​ಗೆ ಚಪ್ಪಲಿ ಎಸೆತ ಪ್ರಕರಣ ನಡೆದಾಗ ಸ್ಪಂದಿಸಿದ್ದ ಅವರು, ಅಭಿಮಾನಿಗಳು ಹಾಗೂ ನಟರಿಗೆ ಬುದ್ಧಿ ಹೇಳಬೇಕಾಗಿದೆ ಎಂದು ಹೇಳಿದ್ದರು.

Continue Reading

ಕರ್ನಾಟಕ

CM Siddaramaiah: ಗಣಿಗಳ ಹರಾಜು ಪ್ರಕ್ರಿಯೆ ಕೂಡಲೇ ಕೈಗೆತ್ತಿಕೊಳ್ಳಲು ಸಿಎಂ ಸೂಚನೆ

CM Siddaramaiah: ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಅಧ್ಯಕ್ಷತೆಯಲ್ಲಿ ಗಣಿ ಮತ್ತು ಭೂವಿಜ್ಞಾನ ಇಲಾಖೆ ಪ್ರಗತಿ ಪರಿಶೀಲನಾ ಸಭೆ ಮಂಗಳವಾರ ನಡೆಯಿತು.

VISTARANEWS.COM


on

CM Siddaramaiah
Koo

ಬೆಂಗಳೂರು: ಮುಖ್ಯಮಂತ್ರಿ ಸಿದ್ದರಾಮಯ್ಯ (CM Siddaramaiah) ಅವರ ಅಧ್ಯಕ್ಷತೆಯಲ್ಲಿ ಗಣಿ ಮತ್ತು ಭೂವಿಜ್ಞಾನ ಇಲಾಖೆ ಪ್ರಗತಿ ಪರಿಶೀಲನಾ ಸಭೆ ಮಂಗಳವಾರ ನಡೆಯಿತು. ಈ ವೇಳೆ ಹರಾಜಿಗೆ ಲಭ್ಯವಿರುವ ಗಣಿಗಳ ಹರಾಜು ಪ್ರಕ್ರಿಯೆಯನ್ನು ಕೂಡಲೇ ಕೈಗೆತ್ತಿಕೊಳ್ಳಲು ಸಂಬಂಧಪಟ್ಟ ಅಧಿಕಾರಿಗಳಿಗೆ ಸಿಎಂ ಸಿದ್ದರಾಮಯ್ಯ ಸೂಚಿಸಿದರು.

ಜಿಲ್ಲಾ ಗಣಿ ಮತ್ತು ಭೂವಿಜ್ಞಾನ ಇಲಾಖೆ ಅಧಿಕಾರಿಗಳಿಗೆ ಚುರುಕು ಮುಟ್ಟಿಸಿ ಸಿಎಂ, ರಾಜಸ್ವ ಸಂಗ್ರಹ ಚುರುಕುಗೊಳಿಸಬೇಕು. ಉಪ ಖನಿಜ ರಾಜಸ್ವ ಸಂಗ್ರಹ ಹೆಚ್ಚಿಸಲು ಕ್ರಮ ಕೈಗೊಳ್ಲಬೇಕು, ಇದಕ್ಕಾಗಿ ಅರಣ್ಯ ಇಲಾಖೆ ಹಾಗೂ ಗಣಿ ಮತ್ತು ಭೂವಿಜ್ಞಾನ ಇಲಾಖೆಗಳು ಸಮನ್ವಯದಿಂದ ಕಾರ್ಯನಿರ್ವಹಿಸಬೇಕು ಎಂದು ಸೂಚಿಸಿದರು.

ಕಂದಾಯ ಇಲಾಖೆ ಲ್ಯಾಂಡ್‌ ಬ್ಯಾಂಕ್‌ ಸೃಜಿಸಿದಲ್ಲಿ, ಅರಣ್ಯ ಪರಿಹಾರ ಭೂಮಿ (compensatory aforestation) ನೀಡಲು ಅನುಕೂಲವಾಗುತ್ತದೆ. ಈ ಬಗ್ಗೆ ಅಧಿಕಾರಿಗಳು ಕ್ರಮ ಕೈಗೊಳ್ಳಬೇಕು. ಡ್ರೋನ್‌ ಸರ್ವೇ ಮತ್ತು AI ತಂತ್ರಜ್ಞಾನದ ಸಾಧ್ಯತೆಗಳನ್ನು ಬಳಸಿಕೊಳ್ಳುವ ಮೂಲಕ ಕ್ರಷರ್‌ಗಳ ರಾಜಸ್ವ ಸಂಗ್ರಹ ಸೋರಿಕೆ ತಡೆಗಟ್ಟಲು ಮುಖ್ಯಮಂತ್ರಿಗಳು ಸೂಚಿಸಿದರು.

ಉಪನೋಂದಣಾಧಿಕಾರಿಗಳ ಕಚೇರಿಗಳಲ್ಲಿ ಸೌಲಭ್ಯ ಹೆಚ್ಚಿಸಲು ಸೂಚನೆ

ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಅಧ್ಯಕ್ಷತೆಯಲ್ಲಿ ನೋಂದಣಿ ಮತ್ತು ಮುದ್ರಾಂಕ ಇಲಾಖೆಯ ಪ್ರಗತಿ ಪರಿಶೀಲನಾ ನಗರದಲ್ಲಿ ಸಭೆ ಮಂಗಳವಾರ ನಡೆಯಿತು. ಈ ವೇಳೆ ಈ ವರೆಗಿನ ತೆರಿಗೆ ಸಂಗ್ರಹ ನಿಗದಿತ ಗುರಿಗೆ ಶೇ. 110 ರಷ್ಟಿದೆ. ಮಾರ್ಗಸೂಚಿ ದರ ಪರಿಷ್ಕರಣೆ ಹಾಗೂ ಆಡಳಿತ ಸುಧಾರಣಾ ಕ್ರಮಗಳಿಂದ ಹೆಚ್ಚಿನ ತೆರಿಗೆ ಸಂಗ್ರಹದ ನಿರೀಕ್ಷೆ ಇದೆ. 2023-24 ನೇ ಸಾಲಿನಲ್ಲಿ 20,000 ಕೋಟಿ ರೂ. ಗುರಿಗೆ ಎದುರಾಗಿ 20287.30 ಕೋಟಿ ರೂ ರಾಜಸ್ವ ಸಂಗ್ರಹವಾಗಿದೆ. ಜಿ.ಐ.ಎಸ್. ಆಧಾರಿತ ಆಸ್ತಿಗಳ ವಿವರ ಹಾಗೂ ಮಾರ್ಗಸೂಚಿ ದರ ನಿಗದಿಯನ್ನು ಜಾರಿಗೊಳಿಸುವ ಮೂಲಕ ತೆರಿಗೆ ಸೋರಿಕೆ ತಡೆಗಟ್ಟಲು ಸಾಧ್ಯವಿದೆ ಎಂದು ಅಧಿಕಾರಿಗಳು ತಿಳಿಸಿದರು.

ಇದನ್ನೂ ಓದಿ | CM Siddaramaiah: ಅಬಕಾರಿ ಪರವಾನಗಿ ನವೀಕರಣಕ್ಕೆ ಕಿರುಕುಳ ನೀಡಬೇಡಿ: ಅಧಿಕಾರಿಗಳಿಗೆ ಸಿಎಂ ಖಡಕ್‌ ಸೂಚನೆ

ಈ ವೇಳೆ ಸಿಎಂ ಪ್ರತಿಕ್ರಯಿಸಿ, ಉಪನೋಂದಣಾಧಿಕಾರಿಗಳ ಕಚೇರಿಗಳಲ್ಲಿ ನಾಗರಿಕ ಸೌಲಭ್ಯಗಳನ್ನು ಹೆಚ್ಚಿಸುವಂತೆ ಸೂಚಿಸಿದರು. ದಸ್ತಾವೇಜುಗಳ ನೋಂದಣಿಯನ್ನು ಡಿಜಿಟಲ್‌ ಆಗಿ ಮಾಡಲು ಕಾಯ್ದೆಗೆ ತಿದ್ದುಪಡಿ ಮಾಡಲಾಗಿದ್ದು, ಪ್ರಸಕ್ತ ಸಾಲಿನಲ್ಲಿ ಜಾರಿಗೆ ತರಲಾಗುವುದು ಎಂದು ಸಚಿವರು ಮಾಹಿತಿ ನೀಡಿದರು.

Continue Reading

ಕರ್ನಾಟಕ

Rajeev Taranath: ಖ್ಯಾತ ಸರೋದ್‌ ವಾದಕ ರಾಜೀವ್ ತಾರಾನಾಥ್ ಇನ್ನಿಲ್ಲ

Rajeev Taranath: ಹಿಂದೂಸ್ತಾನಿ ಸಂಗೀತ ಕ್ಷೇತ್ರದ ಮೇರು ಕಲಾವಿದರಾದ ರಾಜೀವ್ ತಾರಾನಾಥ್ ಅವರು, ಸರೋದ್ ವಾದನದಲ್ಲಿ ಅಪ್ರತಿಮ ವಿದ್ವಾಂಸರು. ಇವರ ಸಂಗೀತ ಸೇವೆಗಾಗಿ ಪದ್ಮಶ್ರೀ, ನಾಡೋಜ ಸೇರಿ ಹತ್ತಾರು ಪ್ರಶಸ್ತಿ ಸಂದಿವೆ.

VISTARANEWS.COM


on

Rajeev Taranath
Koo

ಮೈಸೂರು: ಖ್ಯಾತ ಸರೋದ್ ವಾದಕ ರಾಜೀವ್ ತಾರಾನಾಥ್ (91) (Rajeev Taranath) ಅವರು ಅನಾರೋಗ್ಯದಿಂದ ನಗರದ ಖಾಸಗಿ ಆಸ್ಪತ್ರೆಯಲ್ಲಿ ಮಂಗಳವಾರ ರಾತ್ರಿ ನಿಧನರಾದರು. ಸುಮಾರು 15 ದಿನಗಳಿಂದ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದ ಇವರು ಚಿಕಿತ್ಸೆ ಫಲಕಾರಿಯಾಗದೆ ಕೊನೆಯುಸಿರೆಳೆದಿದ್ದಾರೆ.

ಹಿಂದೂಸ್ತಾನಿ ಸಂಗೀತ ಕ್ಷೇತ್ರದ ಮೇರು ಕಲಾವಿದರಾದ ಇವರು, ಸರೋದ್ ವಾದನದಲ್ಲಿ ಅಪ್ರತಿಮ ವಿದ್ವಾಂಸರು. ಇವರ ಸಂಗೀತ ಸೇವೆಗಾಗಿ ಪದ್ಮಶ್ರೀ, ನಾಡೋಜ ಸೇರಿ ಹತ್ತಾರು ಪ್ರಶಸ್ತಿ ಸಂದಿವೆ. ಮೈಸೂರಿನ ಕುವೆಂಪುನಗರದ ನಿವಾಸದಲ್ಲಿ ನಾಳೆ ಅಂತಿಮ ದರ್ಶನಕ್ಕೆ ವ್ಯವಸ್ಥೆ ಮಾಡಲಾಗುತ್ತಿದೆ.

17, 1932ರ ಅ.17ರಂದು ಜನಿಸಿದ ರಾಜೀವ್ ತಾರಾನಾಥ್ ಅವರು ಅತ್ಯಂತ ಸರಳತೆ ಮತ್ತು ಶ್ರೇಷ್ಠ ಸಂಗೀತಕ್ಕೆ ಹೆಸರಾಗಿದ್ದವರು. ತಮ್ಮ ಪ್ರಾರಂಭಿಕ ಪಾಠಗಳನ್ನು ತಂದೆ ಪಂಡಿತ ತಾರಾನಾಥ್‌ ಅವರಿಂದ ಪಡೆದಿದ್ದರು. ಒಂಬತ್ತು ವರ್ಷದವರಿದ್ದಾಗ ಅವರು ಪ್ರಥಮ ಸಂಗೀತ ಕಛೇರಿಯನ್ನು ನಡೆಸಿದ್ದ ಇವರು,. ಇಪ್ಪತ್ತರ ತಾರುಣ್ಯದಲ್ಲಿ ಆಕಾಶವಾಣಿಯಲ್ಲಿ ಸಂಗೀತಗಾರರಾಗಿ ಹಾಡುತ್ತಿದ್ದರು. ರಾಜೀವ್ ತಾರಾನಾಥರು ಸಾಹಿತ್ಯದಲ್ಲಿ ಪಿಎಚ್‌ಡಿ ಪದವಿ ಪಡೆದಿದ್ದು, ಕೆಲ ವರ್ಷ ಇಂಗ್ಲಿಷ್ ಪ್ರಾಧ್ಯಾಪಕರಾಗಿದ್ದರು. ನಂತರ ಕೆಲಸಕ್ಕೆ ರಾಜೀನಾಮೆ ಕೊಟ್ಟು ಮತ್ತೆ ಸಂಗೀತ ಕ್ಷೇತ್ರಕ್ಕೆ ಪ್ರವೇಶ ಮಾಡಿದ್ದರು. ಸಂಗೀತ ಅಭ್ಯಸಿಸಲು ಕೊಲ್ಕೊತ್ತಾಗೆ ತೆರಳಿದ್ದರು.

ಉಸ್ತಾದ್ ಅಲಿ ಅಕ್ಬರ್‌ ಖಾನ್‌ ಅವರ ಶಿಷ್ಯರಾದ ಇವರು, ಕ್ಯಾಲಿಪೋರ್ನಿಯಾ ವಿವಿಯ ಕಲಾವಿಭಾಗದ ಮುಖ್ಯಸ್ಥರಾಗಿದ್ದರು. 1995ರಿಂದ 2005ರ ಅವಧಿಯಲ್ಲಿ ಕಾರ್ಯನಿರ್ವಹಿಸಿದ್ದರು. ಬಳಿಕ ಮೈಸೂರಿನಲ್ಲಿ ನೆಲೆಸಿದ್ದರು.

ಸಿಎಂ ಸಿದ್ದರಾಮಯ್ಯ ಸಂತಾಪ

ರಾಜೀವ್ ತಾರಾನಾಥ್ ಅವರ ನಿಧನಕ್ಕೆ ಸಿಎಂ ಸಿದ್ದರಾಮಯ್ಯ ಅವರು ಸಂತಾಪ ಸೂಚಿಸಿದ್ದಾರೆ. ಸಾಮಾಜಿಕ ಜಾಲತಾಣದಲ್ಲಿ ಪ್ರತಿಕ್ರಿಯಿಸಿರುವ ಅವರು, ಜಗತ್ಪ್ರಸಿದ್ಧ ಸರೋದ್ ವಾದಕ, ಕರ್ನಾಟಕದ ಹೆಮ್ಮೆಯ ಸುಪುತ್ರ ಪಂಡಿತ ರಾಜೀವ್ ತಾರಾನಾಥ್ ಅವರ ನಿಧನದಿಂದ ದು:ಖಿತನಾಗಿದ್ದೇನೆ. ಕರ್ನಾಟಕದ ಕೀರ್ತಿ ಪತಾಕೆಯನ್ನು ವಿಶ್ವದಾದ್ಯಂತ ಹಾರಿಸಿದ ರಾಜೀವ್ ತಾರಾನಾಥರ ಅಗಲಿಕೆ ಕರ್ನಾಟಕಕ್ಕೆ ಮಾತ್ರವಲ್ಲ ಇಡೀ ಸಂಗೀತಲೋಕಕ್ಕೆ
ತುಂಬಲಾರದ ನಷ್ಟ.

ಇದನ್ನೂ ಓದಿ | Murder case : ಹಿರಿಯ ಸ್ವಾಮೀಜಿ ಕೊಂದ‌ ಆರೋಪಿ ವಿಷ ಸೇವಿಸಿ ಆತ್ಮಹತ್ಯೆಗೆ ಯತ್ನ

ರಾಜೀವ್ ತಾರಾನಾಥ್ ಖ್ಯಾತ ಸಂಗೀತ ಕಲಾವಿದರು ಮಾತ್ರ ಆಗಿರಲಿಲ್ಲ, ಅದನ್ನು ಮೀರಿ ಶ್ರೇಷ್ಠ ಮಾನವತಾವಾದಿಯಾಗಿದ್ದರು. ಅವರ ಕುಟುಂಬದ ಸದಸ್ಯರು‌ ಮತ್ತು ಅಭಿಮಾನಿಗಳ ಶೋಕದಲ್ಲಿ ನಾನೂ ಭಾಗಿಯಾಗಿದ್ದೇನೆ. ಅವರ ಆತ್ಮಕ್ಕೆ ಶಾಂತಿ ಕೋರುವೆ ತಿಳಿಸಿದ್ದಾರೆ.

Continue Reading
Advertisement
Actor Darshan Arrested
ಪ್ರಮುಖ ಸುದ್ದಿ11 mins ago

Actor Darshan Arrested : ದರ್ಶನ್​ಗೆ ಪೊಲೀಸ್ ಠಾಣೆಯಲ್ಲಿ ರಾಜಾತಿಥ್ಯ; ಚಿಕ್ಕಪೇಟೆ ಬಿರಿಯಾನಿ, ಡೋಲೊ 650!

Dina Bhavishya
ಭವಿಷ್ಯ11 mins ago

Dina Bhavishya : ಜೀವನದಲ್ಲಿ ಹೊಸ ತಿರುವು ಪಡೆದುಕೊಳ್ಳುವ ಸಾಧ್ಯತೆ; ಪ್ರಭಾವಿ ವ್ಯಕ್ತಿಗಳ ಬೆಂಬಲ

Health Benefits Of Jaggery
ಆರೋಗ್ಯ11 mins ago

Health Benefits Of Jaggery: ಬೆಲ್ಲ ಉಳಿದ ಆಹಾರದಂಥಲ್ಲ; ಇದರ ಲಾಭಗಳು ಏನೇನು ತಿಳಿದುಕೊಂಡಿರಿ

T20 World Cup
ಪ್ರಮುಖ ಸುದ್ದಿ5 hours ago

T20 World Cup : ಕೊನೆಗೂ ದುರ್ಬಲ ಕೆನಾಡ ತಂಡದ ವಿರುದ್ಧ ಜಯ ಗಳಿಸಿದ ಪಾಕಿಸ್ತಾನ

Lt. General Upendra Dwivedi
ಪ್ರಮುಖ ಸುದ್ದಿ6 hours ago

Lt. General Upendra Dwivedi : ಸೇನಾ ಮುಖ್ಯಸ್ಥರಾಗಿ ಲೆಫ್ಟಿನೆಂಟ್ ಜನರಲ್ ಉಪೇಂದ್ರ ದ್ವಿವೇದಿ ನೇಮಕ

Terrorist Killed
ಪ್ರಮುಖ ಸುದ್ದಿ6 hours ago

Terrorist Killed : ಜಮ್ಮು ಕಾಶ್ಮೀರದಲ್ಲಿ ಉಗ್ರನೊಬ್ಬನ್ನು ಹೊಡೆದುರುಳಿಸಿದ ಭದ್ರತಾ ಪಡೆ

Joe Biden
ಪ್ರಮುಖ ಸುದ್ದಿ7 hours ago

Joe Biden : ಬಂದೂಕು ಪ್ರಕರಣದಲ್ಲಿ ಅಮೆರಿಕ ಅಧ್ಯಕ್ಷ ಜೊ ಬೈಡೆನ್ ಪುತ್ರ ತಪ್ಪಿತಸ್ಥ; ಕಾದಿದೆ 25 ವರ್ಷ ಜೈಲು ಶಿಕ್ಷೆ

Pavithra Gowda
ಕರ್ನಾಟಕ7 hours ago

Pavithra Gowda: ಬಂಧನದ ಭಯವಿಲ್ಲದೇ ನಗುತ್ತಾ ಸಾಂತ್ವನ ಕೇಂದ್ರಕ್ಕೆ ಹೋದ ಪವಿತ್ರಾ ಗೌಡ!

Priyanka Gandhi:
ಪ್ರಮುಖ ಸುದ್ದಿ8 hours ago

Priyanka Gandhi : ವಾರಾಣಸಿಯಲ್ಲಿ ಪ್ರಿಯಾಂಕ ಸ್ಪರ್ಧಿಸಿದ್ದರೆ ಮೋದಿ ಸೋಲುತ್ತಿದ್ದರು; ರಾಹುಲ್​ ಗಾಂಧಿ

CM Siddaramaiah
ಕರ್ನಾಟಕ8 hours ago

CM Siddaramaiah: ಗಣಿಗಳ ಹರಾಜು ಪ್ರಕ್ರಿಯೆ ಕೂಡಲೇ ಕೈಗೆತ್ತಿಕೊಳ್ಳಲು ಸಿಎಂ ಸೂಚನೆ

Sharmitha Gowda in bikini
ಕಿರುತೆರೆ8 months ago

Geetha Serial Kannada: ನಿದ್ದೆ ಕದ್ದ ಚೋರಿ! ನಟಿ `ಭಾನುಮತಿ’ ಹಾಟ್‌ ಪೋಟೊಗಳಿಗೆ ಫ್ಯಾನ್ಸ್ ಫುಲ್ ಫಿದಾ

Kannada Serials
ಕಿರುತೆರೆ8 months ago

Kannada Serials TRP: 2ನೇ ಸ್ಥಾನದಲ್ಲಿ 2 ಧಾರಾವಾಹಿಗಳು; ಟಿಆರ್‌ಪಿ ರೇಸ್‌ನಲ್ಲಿಲ್ಲ ಭಾಗ್ಯಲಕ್ಷ್ಮೀ!

Bigg Boss- Saregamapa 20 average TRP
ಕಿರುತೆರೆ8 months ago

Kannada Serials TRP: ಏಳನೇ ಸ್ಥಾನಕ್ಕೆ ʻಅಮೃತಧಾರೆʼ ಕುಸಿತ; ಬಿಗ್‌ ಬಾಸ್‌-ಸರಿಗಮಪ ಟಿಆರ್‌ಪಿ ಎಷ್ಟು?

galipata neetu
ಕಿರುತೆರೆ6 months ago

Kanyadana Serial: ಕಿರುತೆರೆಗೆ ಮತ್ತೆ ಎಂಟ್ರಿ ಕೊಟ್ಟ ʻಗಾಳಿಪಟʼ ಖ್ಯಾತಿಯ ʻನೀತುʼ!

Kannada Serials
ಕಿರುತೆರೆ9 months ago

Kannada Serials TRP: ನಾಲ್ಕನೇ ಸ್ಥಾನಕ್ಕೆ ಕುಸಿತ ಕಂಡ ʻಸೀತಾ ರಾಮʼ; ಟಿಆರ್‌ಪಿ ರೇಸ್‌ಗೆ ʻಭಾಗ್ಯಲಕ್ಷ್ಮಿʼ ಬ್ಯಾಕ್‌!

Kannada Serials
ಕಿರುತೆರೆ8 months ago

Kannada Serials TRP: ಟಿಆರ್‌ಪಿಯಲ್ಲಿ ʻಭಾಗ್ಯಲಕ್ಷ್ಮೀʼ ಹವಾ; ʻಪುಟ್ಟಕ್ಕನ ಮಕ್ಕಳುʼ ಧಾರಾವಾಹಿಗೆ ಸಂಕಷ್ಟ!

Bigg Boss' dominates TRP; Sita Rama fell to the sixth position
ಕಿರುತೆರೆ8 months ago

Kannada Serials TRP: ಟಿಆರ್‌ಪಿಯಲ್ಲಿ ʻಬಿಗ್ ಬಾಸ್ʼದೇ ಮೇಲುಗೈ; 6ನೇ ಸ್ಥಾನಕ್ಕೆ ಕುಸಿದ ʻಸೀತಾ ರಾಮʼ

geetha serial Dhanush gowda engagement
ಕಿರುತೆರೆ6 months ago

Dhanush Gowda: ಗೀತಾ ಧಾರಾವಾಹಿ ನಟನ ನಿಶ್ಚಿತಾರ್ಥ; ಭವ್ಯಾಳ ಕಮೆಂಟ್‌ ಬಾಕ್ಸ್‌ ಆಫ್‌!

varun
ಕಿರುತೆರೆ7 months ago

Brindavana Serial: ʼಬೃಂದಾವನʼ ಧಾರಾವಾಹಿಯಲ್ಲಿ ದೊಡ್ಡ ಟ್ವಿಸ್ಟ್‌; ಪ್ರಮುಖ ಪಾತ್ರಧಾರಿಯೇ ಬದಲು

Kannada Serials
ಕಿರುತೆರೆ9 months ago

Kannada Serials TRP: ಟಿಆರ್‌ಪಿಯಲ್ಲಿ ಏರಿಕೆ ಕಂಡ ʻಅಮೃತಧಾರೆʼ; ʻಗಟ್ಟಿಮೇಳʼಕ್ಕೆ ನಾಲ್ಕನೇ ಸ್ಥಾನ!

karnataka weather Forecast
ಮಳೆ12 hours ago

Karnataka Weather : ಭಾರಿ ಮಳೆಗೆ ಗುಡ್ಡದಿಂದ ಉರುಳಿ ಬಿದ್ದ ಬಂಡೆಗಲ್ಲು; ಬೆಂಗಳೂರಲ್ಲೂ ಸಂಜೆ ವರ್ಷಧಾರೆ

actor Darshan
ಚಿತ್ರದುರ್ಗ13 hours ago

Actor Darshan: ರೇಣುಕಾ ಸ್ವಾಮಿ ಕೊಲೆ ಕೇಸ್‌ನಲ್ಲಿ ದರ್ಶನ್‌ ಅರೆಸ್ಟ್‌; ಪ್ರಕರಣವನ್ನು ಸಿಬಿಐಗೆ ವಹಿಸಲು ಒತ್ತಾಯ

Actor Darshan gets a series of questions from the police
ಸಿನಿಮಾ14 hours ago

Actor Darshan : ಪವಿತ್ರಗೌಡ ಬಗ್ಗೆ ಪೋಸ್ಟ್‌ ಮಾಡಿದ್ರೆ ನಿಮಗ್ಯಾಕೆ ಕೋಪ? ದರ್ಶನ್‌ಗೆ ಪೊಲೀಸರ ಪ್ರಶ್ನೆಗಳ ಸುರಿಮಳೆ

Actor Darshan
ಸಿನಿಮಾ16 hours ago

Actor Darshan : ದರ್ಶನ್‌ ಜೈಲಿಗೆ ಹೋಗುತ್ತಿರುವುದು ಇದೇ ಮೊದಲಲ್ಲ; ನಟನ ಮೇಲಿವೆ ಹತ್ತಾರು ಕೇಸ್‌ಗಳು!

Saptami Gowda
ಸಿನಿಮಾ18 hours ago

Saptami Gowda : ಯುವ ಪತ್ನಿ ಶ್ರೀದೇವಿ ವಿರುದ್ಧ ಮಾನಹಾನಿ ಕೇಸ್; ಕಾನೂನು ಹೋರಾಟಕ್ಕೆ ಮುಂದಾದ ನಟಿ ಸಪ್ತಮಿ ಗೌಡ!

Karnataka weather Forecast
ಮಳೆ2 days ago

Karnataka Weather : ಭಾರಿ ಮಳೆಗೆ ಮನೆ ಗೋಡೆ ಕುಸಿದು ಎಮ್ಮೆಗಳು ಸಾವು; ಆಕಳಿನ ಜೀವ ತೆಗೆದ ವಿದ್ಯುತ್‌ ತಂತಿ

Karnataka weather Forecast
ಮಳೆ4 days ago

Karnataka weather : ಮಳೆಯಲ್ಲೆ ತಪಸ್ಸಿಗೆ ಕುಳಿತ ವೃದ್ಧ; ಇನ್ನೊಂದು ವಾರ ನಾನ್‌ ಸ್ಟಾಪ್‌ ವರುಣನ ಅಬ್ಬರ

Sigandur launch
ಶಿವಮೊಗ್ಗ4 days ago

Sigandur launch: ಸಿಗಂದೂರು ಲಾಂಚ್‌ನಲ್ಲಿ ಭಾರಿ ವಾಹನಗಳಿಗೆ ನಿರ್ಬಂಧ

Karnataka Rain
ಮಳೆ6 days ago

Karnataka Rain : ಭಾರಿ ಮಳೆಗೆ ಮರ ಬಿದ್ದು ಮೇಕೆಗಳು ಸಾವು; ಸಿಡಿಲಿಗೆ ಎಲೆಕ್ಟ್ರಿಕ್‌ ಅಂಗಡಿ ಸುಟ್ಟು ಭಸ್ಮ

Lok Sabha Election Result 2024 Live
ದೇಶ1 week ago

Lok Sabha Election Result 2024 Live: ಲೋಕಸಭೆ ಚುನಾವಣೆ ಫಲಿತಾಂಶದ ಲೈವ್‌ ಇಲ್ಲಿ ವೀಕ್ಷಿಸಿ

ಟ್ರೆಂಡಿಂಗ್‌