Dina Bhavishya read your daily horoscope predictions for july 09 2023Dina Bhavishya : ರಜೆ ಇದ್ದರೂ ಇಂದು ಈ ರಾಶಿಯವರಿಗೆ ಮಾನಸಿಕ ಒತ್ತಡ! - Vistara News

ಪ್ರಮುಖ ಸುದ್ದಿ

Dina Bhavishya : ರಜೆ ಇದ್ದರೂ ಇಂದು ಈ ರಾಶಿಯವರಿಗೆ ಮಾನಸಿಕ ಒತ್ತಡ!

ಶ್ರೀ ಶಕೇ 1945, ಶೋಭಕೃತ್ ನಾಮ ಸಂವತ್ಸರ, ಉತ್ತರಾಯಣ, ಗ್ರೀಷ್ಮ ಋತು, ಆಷಾಢ ಮಾಸ, ಕೃಷ್ಣ ಪಕ್ಷದ ಪಂಚಮಿಯ ದಿನವಾದ ಇಂದು ದ್ವಾದಶ ರಾಶಿಗಳ ಭವಿಷ್ಯ (dina bhavishya) ಹೇಗಿದೆ ಎಂಬ ಮಾಹಿತಿಯನ್ನು ಇಲ್ಲಿ ನೀಡಲಾಗಿದೆ.

VISTARANEWS.COM


on

Dina Bhavishya
ಮಹತ್ವದ, ಕುತೂಹಲಕರ ಸುದ್ದಿಗಾಗಿ ಫಾಲೊ ಮಾಡಿ
Koo

ವಾರದ ರಜೆಯ ದಿನವಾದ ಭಾನುವಾರ ಸೂರ್ಯನ ದಿನವಾಗಿದೆ. ಪುನರ್ವಸು ಇಂದು ಸೂರ್ಯನ ನಕ್ಷತ್ರ. ರವಿಯೋಗವು ಇಂದು ಬೆಳಗ್ಗೆ 05:59 ರಿಂದ ಸಂಜೆ 7:29ರವರೆಗೆ ಇರುತ್ತದೆ. ಪುನರ್ವಸು ನಕ್ಷತ್ರದವರು ಒಳ್ಳೆಯ ತಾರಾಬಲವನ್ನು ಪಡೆಯಲಿದ್ದಾರೆ. ಇಂದು ತುಲಾ ರಾಶಿಯ ಉದ್ಯೋಗಿಗಳಿಗೆ ಒತ್ತಡ ಹೆಚ್ಚಾಗಲಿದೆ. ಕುಂಭ ರಾಶಿಯವರ ಕುಟುಂಬದಲ್ಲಿ ಭಿನ್ನಾಭಿಪ್ರಾಯಗಳು ಮೂಡಬಹುದು. ನಿಮ್ಮ ಇಂದಿನ ದಿನ ಹೇಗಿದೆ, ಭವಿಷ್ಯ ಏನು ಹೇಳುತ್ತದೆ (Kannada Dina Bhavishya) ಎಂಬುದನ್ನು ತಿಳಿಯೋಣ.

ಇಂದಿನ ಪಂಚಾಂಗ (kannada panchanga) (09-07-2023)

ಶ್ರೀ ಶಕೇ 1945, ಶೋಭಕೃತ್‌ ನಾಮ ಸಂವತ್ಸರ, ಉತ್ತರಾಯಣ,
ಗ್ರೀಷ್ಮ ಋತು, ಆಷಾಢ ಮಾಸ, ಕೃಷ್ಣ ಪಕ್ಷ

ತಿಥಿ: ಸಪ್ತಮಿ 19:59 ವಾರ: ಭಾನುವಾರ
ನಕ್ಷತ್ರ: ಉತ್ತರ ಭಾದ್ರ 19:28 ಯೋಗ: ಶೋಭನ 14:41
ಕರಣ: ವಿಷ್ಟಿ (ಭದ್ರ) 08:50 ಇಂದಿನ ವಿಶೇಷ: ಮೇಲುಕೋಟೆ ಶ್ರೀಕೃಷ್ಣರಾಜ ಮುಡಿ ಉತ್ಸವ
ಅಮೃತಕಾಲ: ಮಧ್ಯಾಹ್ನ 02 ಗಂಟೆ 54 ನಿಮಿಷದಿಂದ 04 ಗಂಟೆ 26 ನಿಮಿಷದವರೆಗೆ.

ಸೂರ್ಯೋದಯ : 05:59 ಸೂರ್ಯಾಸ್ತ : 06:50

ರಾಹುಕಾಲ : ಸಂಜೆ 4.30 ರಿಂದ 6.00
ಗುಳಿಕಕಾಲ: ಮಧ್ಯಾಹ್ನ 3.00 ರಿಂದ 4.30
ಯಮಗಂಡಕಾಲ: ಮಧ್ಯಾಹ್ನ 12.00 ರಿಂದ 1.30

ದ್ವಾದಶ ರಾಶಿ ಭವಿಷ್ಯ (Dina Bhavishya in Kannada)

Horoscope Today

ಮೇಷ: ನೀವಿಂದು ಧಾರ್ಮಿಕ ಕಾರ್ಯಗಳಲ್ಲಿ ಭಾಗವಹಿಸುವ ಸಾಧ್ಯತೆ. ಗೃಹೋಪಯೋಗಿ ವಸ್ತುಗಳಿಂದಾಗಿ ಖರ್ಚು. ಗೌಪ್ಯ ವಿಷಯಗಳನ್ನು ಹಂಚಿಕೊಳ್ಳುವ ಮುನ್ನ ಎಚ್ಚರಿಕೆ ಇರಲಿ. ಮನೆಯಲ್ಲಿ ಭಿನ್ನಾಭಿಪ್ರಾಯ ಮೂಡದಂತೆ ಎಚ್ಚರಿಕೆ ವಹಿಸಿ. ಉದ್ಯೋಗಿಗಳಿಗೆ ಕಿರಿಕಿರಿ. ಆರೋಗ್ಯ ಮಧ್ಯಮ. ಮಾನಸಿಕ ಒತ್ತಡ ಹೆಚ್ಚಾಗಲಿದೆ. ಕೌಟುಂಬಿಕವಾಗಿ ಸಾಧಾರಣ ಫಲ.
ಅದೃಷ್ಟ ಸಂಖ್ಯೆ: 1

Horoscope Today

ವೃಷಭ: ಆತ್ಮವಿಶ್ವಾಸದಿಂದ ಕಾರ್ಯದಲ್ಲಿ ಯಶಸ್ಸು ಕೀರ್ತಿ ಸಿಗುವುದು. ಹಿರಿಯರ ಬೆಂಬಲ ಆಶೀರ್ವಾದ ಸಿಗಲಿದೆ. ಹಣಕಾಸು ವ್ಯವಹಾರಗಳಲ್ಲಿ ಪ್ರಗತಿ. ಹಳೆಯ ಸ್ನೇಹಿತರೊಂದಿಗೆ ಸಮಯ ಹಂಚಿಕೊಳ್ಳುವ ಸಾಧ್ಯತೆ. ಆರೋಗ್ಯ ಪರಿಪೂರ್ಣ. ಉದ್ಯೋಗಿಗಳಿಗೆ ಕೊಂಚ ಕಿರಿಕಿರಿ. ಕೌಟುಂಬಿಕವಾಗಿ ಶುಭ ಫಲ.
ಅದೃಷ್ಟ ಸಂಖ್ಯೆ: 9

Horoscope Today

ಮಿಥುನ: ಆರೋಗ್ಯದ ಕುರಿತು ಕಾಳಜಿ ಇರಲಿ. ಆದಷ್ಟು ತಾಳ್ಮೆಯಿಂದ ವರ್ತಿಸಿ. ಭವಿಷ್ಯದಲ್ಲಿನ ಹೂಡಿಕೆ ಯೋಜನೆ ಕುರಿತು ಆಲೋಚನೆ ಮಾಡುವಿರಿ. ಕುಟುಂಬದಲ್ಲಿ ಸಂಗಾತಿಯ ಬೆಂಬಲ ಸಲಹೆ ಸಿಗಲಿದೆ. ಜನರ ಮಟ್ಟಿಗೆ ಖರ್ಚು. ಉದ್ಯೋಗಿಗಳಿಗೆ ಭರವಸೆ ಮೂಡಲಿದೆ. ಕೌಟುಂಬಿಕವಾಗಿ ಶುಭ ಫಲ.
ಅದೃಷ್ಟ ಸಂಖ್ಯೆ: 7

Horoscope Today

ಕಟಕ: ಅತಿಯಾದ ಒತ್ತಡದಿಂದಾಗಿ ಆರೋಗ್ಯದ ಮೇಲೆ ಪರಿಣಾಮ ಬೀರುವ ಸಾಧ್ಯತೆ ಹೆಚ್ಚು, ಕಾಳಜಿ ವಹಿಸುವುದು ಸೂಕ್ತ. ಹೂಡಿಕೆ ವ್ಯವಹಾರದ ಕುರಿತು ಎಚ್ಚರಿಕೆ ಇರಲಿ. ಆರ್ಥಿಕವಾಗಿ ಲಾಭ. ಉದ್ಯೋಗಿಗಳಿಗೆ ಒತ್ತಡ ಹೆಚ್ಚಾಗಲಿದೆ. ಕುಟುಂಬದ ವಾತಾವರಣ ಕೆಡದಂತೆ ಜಾಗ್ರತೆವಹಿಸಿ. ಕೌಟುಂಬಿಕವಾಗಿ ಸಾಧಾರಣ ಫಲ.
ಅದೃಷ್ಟ ಸಂಖ್ಯೆ: 2

Horoscope Today

ಸಿಂಹ: ಆಕರ್ಷಕ ವರ್ತನೆ ಗಮನ ಸೆಳೆಯುತ್ತದೆ. ಕೆಲಸ ಕಾರ್ಯಗಳಲ್ಲಿ ಯಶಸ್ಸು. ಕುಟುಂಬದಲ್ಲಿ ಭಿನ್ನಾಭಿಪ್ರಾಯ ಮೂಡುವ ಸಾಧ್ಯತೆ, ಸಾಧ್ಯವಾದಷ್ಟು ಮಟ್ಟಿಗೆ ತಾಳ್ಮೆ ಇರಲಿ. ಉನ್ನತ ವ್ಯಕ್ತಿಗಳ ಸಹಾಯ ದೊರೆಯಲಿದೆ. ಉದ್ಯೋಗಿಗಳಿಗೆ ಯಶಸ್ಸು, ಕೀರ್ತಿ, ಶುಭ ಫಲ. ಕೌಟುಂಬಿಕವಾಗಿ ಮಿಶ್ರ ಫಲ.
ಅದೃಷ್ಟ ಸಂಖ್ಯೆ: 9

Horoscope Today

ಕನ್ಯಾ: ಹಳೆಯ ವಿಚಾರಗಳನ್ನು ಕೆದಕಿ ಮಾನಸಿಕ ಒತ್ತಡವನ್ನು ಹೆಚ್ಚು ಮಾಡಿಕೊಳ್ಳುವುದು ಬೇಡ. ಮುಂದೆಯಾಗುವ ಕಾರ್ಯಗಳ ಬಗೆಗೆ ಗಮನ ಇರಲಿ. ಆರೋಗ್ಯದ ಕುರಿತು ಕಾಳಜಿ ಇರಲಿ. ಹಣಕಾಸು ವ್ಯವಹಾರಗಳಲ್ಲಿ ಪ್ರಗತಿ. ಉದ್ಯೋಗಿಗಳಿಗೆ ಶುಭ ಫಲ. ಕೌಟುಂಬಿಕವಾಗಿ ಸಾಧಾರಣ ಫಲ.
ಅದೃಷ್ಟ ಸಂಖ್ಯೆ: 7

ಭವಿಷ್ಯ ಮತ್ತು ಜ್ಯೋತಿಷ್ಯಕ್ಕೆ ಸಂಬಂಧಿಸಿದ ಲೇಖನ/ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್‌ (Click Here) ಮಾಡಿ

Horoscope Today

ತುಲಾ: ಹಣಕಾಸಿನ ಸಮಸ್ಯೆ ತಲೆದೋರಲಿದೆ. ಹಿರಿಯರ ಮಾರ್ಗದರ್ಶನ ಸಿಗಲಿದೆ. ಕುಟುಂಬದ ಆಪ್ತರಿಂದ ಸಮಾಧಾನದ ಮಾತುಗಳು ಕೇಳಿ ಬರಲಿದೆ. ಹೂಡಿಕೆ ವ್ಯವಹಾರಗಳನ್ನು ಮಾಡುವುದು ಬೇಡ. ಉದ್ಯೋಗಿಗಳಿಗೆ ಹೆಚ್ಚಿದ ಒತ್ತಡ. ಕೌಟುಂಬಿಕವಾಗಿ ಮಿಶ್ರ ಫಲ.
ಅದೃಷ್ಟ ಸಂಖ್ಯೆ: 1

Horoscope Today

ವೃಶ್ಚಿಕ: ಹಣಕಾಸು ವ್ಯವಹಾರಗಳಲ್ಲಿ ಪ್ರಗತಿ. ಆರೋಗ್ಯ ಪರಿಪೂರ್ಣ. ದೀರ್ಘಕಾಲದ ಕೆಲಸಕಾರ್ಯಗಳಲ್ಲಿ ಯಶಸ್ಸು. ಕುಟುಂಬದವರ ಸಹಕಾರ ಸಿಗಲಿದೆ. ವ್ಯಾಪಾರ ವ್ಯವಹಾರಗಳಲ್ಲಿ ಪ್ರಗತಿ. ಉದ್ಯೋಗಿಗಳಿಗೆ ಕೊಂಚಮಟ್ಟಿಗೆ ಒತ್ತಡ. ಕೌಟುಂಬಿಕವಾಗಿ ಶುಭ ಫಲ.
ಅದೃಷ್ಟ ಸಂಖ್ಯೆ: 3

ವಾರದ ರಜೆಯ ದಿನವಾದ ಇಂದು ಯಾವ ದೇವರನ್ನು ಪೂಜಿಸಬೇಕು? ಈ ವಿಡಿಯೋ ನೋಡಿ.
Horoscope Today

ಧನಸ್ಸು: ಭವಿಷ್ಯದ ಕುರಿತಾಗಿ ಆಲೋಚನೆ, ಜೀವನದಲ್ಲಿ ಅಭದ್ರತೆಯು ಕಾಡಬಹುದು. ಯಾವುದನ್ನೂ ಅತಿಯಾಗಿ ಆಲೋಚಿಸಿ ಮಾನಸಿಕ ನೆಮ್ಮದಿ ಹಾಳು ಮಾಡಿಕೊಳ್ಳುವುದು ಬೇಡ. ಆರೋಗ್ಯದ ಕುರಿತು ಕಾಳಜಿ ಇರಲಿ. ಹೂಡಿಕೆ, ಹಣಕಾಸು ವ್ಯವಹಾರಗಳಲ್ಲಿ ಪ್ರಗತಿ. ಉದ್ಯೋಗಿಗಳಿಗೆ ಶುಭ ಫಲ. ಕೌಟುಂಬಿಕವಾಗಿ ಶುಭ ಫಲ.
ಅದೃಷ್ಟ ಸಂಖ್ಯೆ: 9

Horoscope Today

ಮಕರ: ಆರ್ಥಿಕ ಪ್ರಗತಿ ಉತ್ತಮ. ಆರೋಗ್ಯದಲ್ಲಿ ಕೊಂಚ ಏರು-ಪೇರು. ಕೆಲವು ನಿರ್ಧಾರಗಳನ್ನು ಕೈಗೊಳ್ಳುವ ಸಾಧ್ಯತೆ. ಹಿಂದೆ ನೀಡಿದ ಹಣವು ಮರಳುವ ಸಾಧ್ಯತೆ. ಯಾವುದಾದರೂ ಪ್ರಸಂಗಗಳಿಂದ ನಿಮ್ಮ ಮೇಲೆ ಅಪವಾದ ಬರುವ ಸಾಧ್ಯತೆ ಎಚ್ಚರಿಕೆ ಇರಲಿ. ಉದ್ಯೋಗಿಗಳಿಗೆ ಶುಭ ಫಲ. ಕೌಟುಂಬಿಕವಾಗಿ ಸಾಧಾರಣ ಫಲ.
ಅದೃಷ್ಟ ಸಂಖ್ಯೆ: 9

Horoscope Today

ಕುಂಭ: ಉತ್ಸಾಹದಿಂದ ಕಾರ್ಯ ಸಿದ್ಧಿ. ಅಗತ್ಯವಸ್ತುಗಳ ಖರೀದಿಗಾಗಿ ಖರ್ಚು. ಅಮೂಲ್ಯ ವಸ್ತುಗಳ ಕುರಿತು ಲಕ್ಷ್ಯ ಇರಲಿ. ಕುಟುಂಬದಲ್ಲಿ ಭಿನ್ನಾಭಿಪ್ರಾಯಗಳು ಮೂಡಬಹುದು ಎಚ್ಚರ. ಆರೋಗ್ಯ ಪರಿಪೂರ್ಣ. ಉದ್ಯೋಗಿಗಳಿಗೆ ಹೆಚ್ಚಿದ ಒತ್ತಡ. ಕೌಟುಂಬಿಕವಾಗಿ ಮಿಶ್ರ ಫಲ.
ಅದೃಷ್ಟ ಸಂಖ್ಯೆ: 6

ಇದನ್ನೂ ಓದಿ : Budha Jayanti 2023 : ವಿದ್ಯೆ ಬುದ್ಧಿ ನೀಡುವ ಗ್ರಹ ಬುಧ

Horoscope Today

ಮೀನ: ಅನೇಕ ಮೂಲಗಳಿಂದ ಹಣಕಾಸಿನ ಹರಿವು ಹೆಚ್ಚಳ. ದೀರ್ಘಕಾಲದ ಆಲೋಚನೆಯಿಂದ ದೂರವಾಗುವ ಸಾಧ್ಯತೆ. ಮಾನಸಿಕ ನೆಮ್ಮದಿ. ಆರೋಗ್ಯ ಪರಿಪೂರ್ಣ. ಉದ್ಯೋಗಿಗಳಿಗೆ ಭರವಸೆಯ ಹೊಸ ಅವಕಾಶಗಳು ಒದಗಿಬರುವುದು. ಕೌಟುಂಬಿಕವಾಗಿ ಶುಭ ಫಲ.
ಅದೃಷ್ಟ ಸಂಖ್ಯೆ: 4

Horoscope Today

ವಿದ್ವಾನ್ ಶ್ರೀ ನವೀನಶಾಸ್ತ್ರಿ ರಾ. ಪುರಾಣಿಕ
ಖ್ಯಾತ ಜ್ಯೋತಿಷಿ ಹಾಗೂ ಉಪನ್ಯಾಸಕರು

M: 9481854580 | pnaveenshastri@gmail.com

ಕ್ಷಣ ಕ್ಷಣದ ಮಾಹಿತಿಗಾಗಿ Vistara News FaceBook ಪೇಜ್ ಫಾಲೋ ಮಾಡಿ
ಮಹತ್ವದ ಮಾಹಿತಿಗಾಗಿ ವಿಸ್ತಾರ ನ್ಯೂಸ್ ಆ್ಯಪ್ ಉಚಿತವಾಗಿ ಡೌನ್ ಲೋಡ್ ಮಾಡಿಕೊಳ್ಳಿ: Andriod App | IOS App
Continue Reading
Click to comment

Leave a Reply

Your email address will not be published. Required fields are marked *

ದೇಶ

Bridge Collapse: ಬಿಹಾರದಲ್ಲಿ ಮತ್ತೊಂದು ನಿರ್ಮಾಣ ಹಂತದ ಸೇತುವೆ ಕುಸಿತ; 9 ದಿನದಲ್ಲಿ 5ನೇ ಪ್ರಕರಣ!

Bridge Collapse: ಮಧುಬನಿ ಜಿಲ್ಲೆಯ ಭೇಜಾ ಪೊಲೀಸ್‌ ಠಾಣೆ ವ್ಯಾಪ್ತಿಯಲ್ಲಿ ಭೂತಾಹಿ ನದಿಗೆ ಅಡ್ಡಲಾಗಿ ನಿರ್ಮಿಸಲಾಗುತ್ತಿದ್ದ ಸೇತುವೆಯು ಕುಸಿದಿದೆ. ಸುಮಾರು 3 ಕೋಟಿ ರೂ. ವೆಚ್ಚದಲ್ಲಿ ಸೇತುವೆಯನ್ನು ನಿರ್ಮಿಸಲಾಗುತ್ತಿದೆ. 2021ರಿಂದಲೂ ಕೇವಲ 75 ಮೀಟರ್‌ ಉದ್ದದ ಸೇತುವೆ ನಿರ್ಮಾಣ ಕಾಮಗಾರಿ ನಡೆಯುತ್ತಲೇ ಇದೆ.

VISTARANEWS.COM


on

Bridge Collapse
Koo

ಪಟನಾ: ಬಿಹಾರದಲ್ಲಿ (Bihar) ಕಳಪೆ ಕಾಮಗಾರಿಗಳು, ಸರ್ಕಾರದ ಕಾಮಗಾರಿಗಳಲ್ಲಿ ಬ್ರಹ್ಮಾಂಡ ಭ್ರಷ್ಟಾಚಾರದ ಆರೋಪ ಕೇಳಿಬರುತ್ತಲೇ ಇವೆ. ಅದರಲ್ಲೂ, ಕಳೆದ ಕೆಲ ದಿನಗಳಲ್ಲಿ ಸಾಲು ಸಾಲು ನಿರ್ಮಾಣ ಹಂತದ ಸೇತುವೆಗಳು ಕುಸಿಯುತ್ತಿರುವುದು (Bridge Collapse) ಭ್ರಷ್ಟಾಚಾರಕ್ಕೆ ಹಿಡಿದ ಕನ್ನಡಿಯಾಗಿದೆ. ಇದರ ಬೆನ್ನಲ್ಲೇ, ಶುಕ್ರವಾರ (ಜೂನ್‌ 28) ಬಿಹಾರದ ಮಧುಬನಿ (Madhubani Region) ಪ್ರದೇಶದಲ್ಲಿ ನಿರ್ಮಾಣ ಹಂತದ ಸೇತುವೆಯೊಂದು ಕುಸಿದಿದೆ. ಆ ಮೂಲಕ ಕಳೆದ 9 ದಿನದಲ್ಲಿ ಬಿಹಾರದಲ್ಲಿಯೇ 5 ಸೇತುವೆಗಳು ಕುಸಿದಂತಾಗಿದೆ.

ಮಧುಬನಿ ಜಿಲ್ಲೆಯ ಭೇಜಾ ಪೊಲೀಸ್‌ ಠಾಣೆ ವ್ಯಾಪ್ತಿಯಲ್ಲಿ ಭೂತಾಹಿ ನದಿಗೆ ಅಡ್ಡಲಾಗಿ ನಿರ್ಮಿಸಲಾಗುತ್ತಿದ್ದ ಸೇತುವೆಯು ಕುಸಿದಿದೆ. ಸುಮಾರು 3 ಕೋಟಿ ರೂ. ವೆಚ್ಚದಲ್ಲಿ ಸೇತುವೆಯನ್ನು ನಿರ್ಮಿಸಲಾಗುತ್ತಿದೆ. 2021ರಿಂದಲೂ ಕೇವಲ 75 ಮೀಟರ್‌ ಉದ್ದದ ಸೇತುವೆ ನಿರ್ಮಾಣ ಕಾಮಗಾರಿ ನಡೆಯುತ್ತಲೇ ಇದೆ. ಸೇತುವೆ ನಿರ್ಮಾಣದಲ್ಲಿ ಭ್ರಷ್ಟಾಚಾರ ನಡೆಯುತ್ತಿದೆ, ಇದಕ್ಕಾಗಿಯೇ ವಿಳಂಬವಾಗುತ್ತಿದೆ ಎಂಬುದಾಗಿ ಸ್ಥಳೀಯರು ಆರೋಪಿಸುತ್ತಿದ್ದರೂ ಅಧಿಕಾರಿಗಳು ಗಮನ ಹರಿಸಿಲ್ಲ. ಈಗ ಸೇತುವೆಯು ನಿರ್ಮಾಣ ಹಂತದಲ್ಲಿಯೇ ಕುಸಿದಿರುವುದು ಜನರ ಆಕ್ರೋಶವನ್ನು ಕೆರಳಿಸಿದೆ.

ಬಿಹಾರ ರಾಜ್ಯದಲ್ಲಿ ಒಂದರ ಹಿಂದೆ ಒಂದರಂತೆ ಸೇತುವೆಗಳು ಕುಸಿಯುತ್ತಿರುವುದಕ್ಕೆ ಆರ್‌ಜೆಡಿ ನಾಯಕ ತೇಜಸ್ವಿ ಯಾದವ್‌ ಆಕ್ರೋಶ ವ್ಯಕ್ತಪಡಿಸಿದ್ದಾರೆ. “ಬಿಹಾರದಲ್ಲಿ ಸೇತುವೆ ಕುಸಿತದ ಪ್ರಕರಣಗಳು ಸುದ್ದಿಯಾಗುತ್ತಲೇ ಇವೆ. ಕಳೆದ 9 ದಿನಗಳಲ್ಲಿಯೇ ಇಂತಹ 5 ಪ್ರಕರಣಗಳು ಬೆಳಕಿಗೆ ಬಂದಿವೆ. ನಿತೀಶ್‌ ಕುಮಾರ್‌ ನೇತೃತ್ವದ ಸರ್ಕಾರವು ಸೇತುವೆ ನಿರ್ಮಾಣದಲ್ಲಿ ನಿರ್ಲಕ್ಷ್ಯ ವಹಿಸುತ್ತಿದೆ ಹಾಗೂ ಭ್ರಷ್ಟಾಚಾರಕ್ಕೆ ಕುಮ್ಮಕ್ಕು ನೀಡುತ್ತಿದೆ. ಜನರ ದುಡ್ಡು ಹೀಗೆ ನೀರು ಪಾಲಾಗುತ್ತಿದ್ದರೂ ಮುಖ್ಯಮಂತ್ರಿಯು ಗಾಢ ನಿದ್ದೆಯಲ್ಲಿದ್ದಾರೆ” ಎಂಬುದಾಗಿ ಟೀಕಿಸಿದ್ದಾರೆ.

ಬಿಹಾರದಲ್ಲಿ ಕಳೆದ ಕೆಲ ದಿನಗಳಿಂದ ಸೇತುವೆ ಕುಸಿತದ ಪ್ರಕರಣಗಳು ಬೆಳಕಿಗೆ ಬರುತ್ತಲೇ ಇವೆ. ಗುರುವಾರವಷ್ಟೇ (ಜೂನ್‌ 27) ಕಿಶನ್‌ಗಂಜ್‌ ಜಿಲ್ಲೆಯಲ್ಲಿ ಸೇತುವೆಯೊಂದು ಕುಸಿದಿತ್ತು. ಜೂನ್‌ 23ರಂದು ಪೂರ್ವ ಚಂಪಾರಣ್‌ ಜಿಲ್ಲೆಯಲ್ಲಿ ಸಣ್ಣ ಸೇತುವೆಯೊಂದು ಕುಸಿದು ಅಧಿಕಾರಿಗಳು ಜನರ ಆಕ್ರೋಶಕ್ಕೆ ಗುರಿಯಾಗಿದ್ದರು. ಜೂನ್‌ 22ರಂದು ಕೂಡ ಸಿವಾನ್‌ ಜಿಲ್ಲೆಯಲ್ಲಿ ಸೇತುವೆ ಕುಸಿದಿತ್ತು. ಜೂನ್‌ 19ರಂದೂ ಅರಾತಿಯಾ ಪ್ರದೇಶದಲ್ಲಿ ನಿರ್ಮಾಣ ಹಂತದ ಸೇತುವೆ ಧರೆಗುರುಳಿತ್ತು.  

ಇದನ್ನೂ ಓದಿ: ಬಾಲ್ಟಿಮೋರ್‌ ಸೇತುವೆ ಕುಸಿತ ಪ್ರಕರಣ; ಹಡಗಿನಲ್ಲಿದ್ದ ಭಾರತೀಯ ಸಿಬ್ಬಂದಿಯ ಸಮಯಪ್ರಜ್ಞೆಗೆ ಅಮೆರಿಕ ಅಧ್ಯಕ್ಷ ಬೈಡನ್ ಮೆಚ್ಚುಗೆ

Continue Reading

ಭವಿಷ್ಯ

Dina Bhavishya : ಈ ದಿನ ಆತ್ಮೀಯರೊಂದಿಗೆ ಕಾಲ ಕಳೆಯುವಿರಿ

Dina Bhavishya: ಶ್ರೀ ಶಕೇ 1946, ಕ್ರೋಧಿನಾಮ ಸಂವತ್ಸರ, ಉತ್ತರಾಯಣ, ಗ್ರೀಷ್ಮ ಋತು, ಜೇಷ್ಠ ಮಾಸ, ಕೃಷ್ಣ ಪಕ್ಷದ ಅಷ್ಟಮಿ ದಿನವಾದ ಇಂದು ದ್ವಾದಶ ರಾಶಿಗಳ ಭವಿಷ್ಯ ಹೇಗಿದೆ ಎಂಬ ಮಾಹಿತಿಯನ್ನು ಇಲ್ಲಿ ನೀಡಲಾಗಿದೆ.

VISTARANEWS.COM


on

By

Dina Bhavishya
Koo

ಚಂದ್ರನು ಶನಿವಾರವೂ ಮೇಷ ರಾಶಿಯಲ್ಲೆ ನೆಲಸಲಿದ್ದಾನೆ. ಇದರಿಂದಾಗಿ ವೃಷಭ, ಮಿಥುನ, ಕನ್ಯಾ, ತುಲಾ, ಮಕರ, ಮೀನ ರಾಶಿಯವರಿಗೆ ಚಂದ್ರನ ಬಲ ದೊರೆಯಲಿದೆ. ಇಂದಿನ ದಿನ ಭವಿಷ್ಯವನ್ನು (Dina Bhavishya) ನೋಡುವುದಾದರೆ, ಮೇಷ ರಾಶಿಯವರು ನಿಮ್ಮ ಸತತ ಪ್ರಯತ್ನ ಹಾಗೂ ಕುಟುಂಬ ಸದಸ್ಯರ ಸಕಾಲಿಕ ಬೆಂಬಲ ಬಯಸಿದ ಫಲಿತಾಂಶಗಳು ಸಿಗಲಿದೆ. ಆರೋಗ್ಯ ಪರಿಪೂರ್ಣವಾಗಿರಲಿದೆ. ಅನಿವಾರ್ಯ ಕಾರಣಗಳಿಂದ ಖರ್ಚು ಇರಲಿದೆ. ಉದ್ಯೋಗಿಗಳಿಗೆ ಕೊಂಚ ಕೆಲಸದ ನಿರಾಳತೆ ಸಿಗಲಿದೆ. ಸಿಂಹ ರಾಶಿಯವರು ದಿನದ ಮಟ್ಟಿಗೆ ಆರೋಗ್ಯದಲ್ಲಿ ವ್ಯತ್ಯಾಸ ಆಗುವ ಸಾಧ್ಯತೆ ಇದ್ದು, ಎಚ್ಚರಿಕೆ ಇರಲಿ. ವಿಶ್ವಾಸದಿಂದ ಕಾರ್ಯ ಸಿದ್ಧಿ. ಲಾಭದ ಹೂಡಿಕೆ ಕುರಿತಾಗಿ ಆಲೋಚನೆ ಮಾಡುವಿರಿ. ಕುಟುಂಬದ ಜತೆಗೆ ಕಾಲ ಕಳೆಯಲು ಹೆಚ್ಚು ಸಮಯ ವಿನಿಯೋಗಿಸುವ ಸಾಧ್ಯತೆ ಇದೆ. ಇದೂ ಸೇರಿದಂತೆ ದ್ವಾದಶ ರಾಶಿಗಳ ಇಂದಿನ ಭವಿಷ್ಯ ಹೇಗಿದೆ? ಪಂಚಾಂಗ ಏನು ಹೇಳುತ್ತದೆ ಎಂಬುದನ್ನು ತಿಳಿಯೋಣ.

ಇಂದಿನ ಪಂಚಾಂಗ (kannada panchanga) (29-06-2024)

ಶ್ರೀ ಶಕೇ 1946, ಕ್ರೋಧಿನಾಮ ಸಂವತ್ಸರ, ಉತ್ತರಾಯಣ, ಗ್ರೀಷ್ಮ ಋತು, ಜೇಷ್ಠ ಮಾಸ, ಕೃಷ್ಣ ಪಕ್ಷ.
ತಿಥಿ: ಅಷ್ಟಮಿ 14:19 16:26 ವಾರ: ಶನಿವಾರ
ನಕ್ಷತ್ರ: ಉತ್ತರ ಭಾದ್ರಪದ 08:48 ಯೋಗ: ಶೋಭನ 18:52
ಕರಣ: ಕೌಲವ 14:19 ಅಮೃತಕಾಲ: ಬೆಳಗ್ಗೆ 05:17 ರಿಂದ 06:48

ಸೂರ್ಯೋದಯ : 05:57   ಸೂರ್ಯಾಸ್ತ : 06:50

ರಾಹುಕಾಲ: ಬೆಳಗ್ಗೆ 9.00 ರಿಂದ 10.30
ಗುಳಿಕಕಾಲ: ಬೆಳಗ್ಗೆ 6.00 ರಿಂದ 7.30

ಯಮಗಂಡಕಾಲ: ಮಧ್ಯಾಹ್ನ 1.30 ರಿಂದ 3.00

ದ್ವಾದಶ ರಾಶಿ ಭವಿಷ್ಯ (Dina Bhavishya in Kannada)

Horoscope Today

ಮೇಷ: ನಿಮ್ಮ ಸತತ ಪ್ರಯತ್ನ ಹಾಗೂ ಕುಟುಂಬ ಸದಸ್ಯರ ಸಕಾಲಿಕ ಬೆಂಬಲ ಬಯಸಿದ ಫಲಿತಾಂಶಗಳು ಸಿಗಲಿದೆ. ಆರೋಗ್ಯ ಪರಿಪೂರ್ಣವಾಗಿರಲಿದೆ. ಅನಿವಾರ್ಯ ಕಾರಣಗಳಿಂದ ಖರ್ಚು ಇರಲಿದೆ. ಉದ್ಯೋಗಿಗಳಿಗೆ ಕೊಂಚ ಕೆಲಸದ ನಿರಾಳತೆ ಸಿಗಲಿದೆ. ಕೌಟುಂಬಿಕವಾಗಿ ಶುಭ ಫಲ. ಅದೃಷ್ಟ ಸಂಖ್ಯೆ: 2

Horoscope Today

ವೃಷಭ: ಕುಟುಂಬ ಸದಸ್ಯರೊಂದಿಗೆ ತಾಳ್ಮೆಯಿಂದ ವರ್ತಿಸಿ, ಅಚಾತುರ್ಯದಿಂದ ಆಡಿದ ಮಾತುಗಳು ಅಪಾಯ ತರುವ ಸಾಧ್ಯತೆ ಎಚ್ಚರಿಕೆ ಇರಲಿ. ದೀರ್ಘಕಾಲದ ಅನಾರೋಗ್ಯದಿಂದ ಮುಕ್ತಿ ಪಡೆಯುವಿರಿ. ಆರ್ಥಿಕ ಸ್ಥಿತಿಯಲ್ಲಿ ಸುಧಾರಣೆ ಕಂಡು ಬರಲಿದೆ. ಕೌಟುಂಬಿಕವಾಗಿ ಸಾಧಾರಣ ಫಲ. ಅದೃಷ್ಟ ಸಂಖ್ಯೆ: 2

Horoscope Today

ಮಿಥುನ: ಹೂಡಿಕೆ ವ್ಯವಹಾರಗಳ ಕುರಿತು ಆಲೋಚನೆ ಮಾಡುವಿರಿ. ಆರ್ಥಿಕವಾಗಿ ಪ್ರಗತಿ ಹೊಂದುವಿರಿ. ಅತಿಥಿಗಳ ಆಗಮನದಿಂದ ಅವರೊಂದಿಗೆ ಸಮಯ ಕಳೆಯುವ ಸಾಧ್ಯತೆ ಇದೆ. ವಿವಾಹ ಅಪೇಕ್ಷಿತರಿಗೆ ಶುಭ ಸುದ್ದಿ ಸಿಗಲಿದೆ. ಆರೋಗ್ಯ ಪರಿಪೂರ್ಣವಾಗಿರಲಿದೆ. ಕೌಟುಂಬಿಕವಾಗಿ ಶುಭ ಫಲ. ಅದೃಷ್ಟ ಸಂಖ್ಯೆ: 9

Horoscope Today

ಕಟಕ: ಸಂಗಾತಿಯೊಂದಿಗೆ ಮುಖ್ಯ ವಿಷಯಗಳ ಕುರಿತು ಚರ್ಚೆ ಮಾಡುವಿರಿ. ಆರೋಗ್ಯ ಪರಿಪೂರ್ಣವಾಗಿರಲಿದೆ. ಅನಿವಾರ್ಯ ಕಾರಣಗಳಿಂದ ಖರ್ಚು ಇರಲಿದೆ. ಅತಿಯಾದ ಕೆಲಸದ ಒತ್ತಡದಿಂದ ದೈಹಿಕವಾಗಿ ಬಳಲುವ ಸಾಧ್ಯತೆ ಇದೆ. ಅಮೂಲ್ಯ ವಸ್ತುಗಳ ಬಗೆಗೆ ಜಾಗೃತಿ ಇರಲಿ. ಕೌಟುಂಬಿಕವಾಗಿ ಮಿಶ್ರ ಫಲ. ಅದೃಷ್ಟ ಸಂಖ್ಯೆ: 3

Horoscope Today

ಸಿಂಹ: ದಿನದ ಮಟ್ಟಿಗೆ ಆರೋಗ್ಯದಲ್ಲಿ ವ್ಯತ್ಯಾಸ ಆಗುವ ಸಾಧ್ಯತೆ ಇದ್ದು, ಎಚ್ಚರಿಕೆ ಇರಲಿ. ವಿಶ್ವಾಸದಿಂದ ಕಾರ್ಯ ಸಿದ್ಧಿ. ಲಾಭದ ಹೂಡಿಕೆ ಕುರಿತಾಗಿ ಆಲೋಚನೆ ಮಾಡುವಿರಿ. ಕುಟುಂಬದ ಜತೆಗೆ ಕಾಲ ಕಳೆಯಲು ಹೆಚ್ಚು ಸಮಯ ವಿನಿಯೋಗಿಸುವ ಸಾಧ್ಯತೆ ಇದೆ. ಕೌಟುಂಬಿಕವಾಗಿ ಮಿಶ್ರ ಫಲ. ಅದೃಷ್ಟ ಸಂಖ್ಯೆ: 9

Horoscope Today

ಕನ್ಯಾ: ನಿಮ್ಮ ಕ್ರಿಯಾಶೀಲ ಕಾರ್ಯ ಯೋಜನೆ ಸಫಲತೆಯನ್ನು ತಂದು ಕೊಡಲಿದೆ. ಆಪ್ತರು ನಿಮ್ಮ ಸಹನೆಯನ್ನು ಪರೀಕ್ಷಿಸುವ ಸಾಧ್ಯತೆ ಇದೆ. ಆರೋಗ್ಯದ ಕುರಿತು ಕಾಳಜಿ ಇರಲಿ. ಆರ್ಥಿಕವಾಗಿ ಪ್ರಗತಿ ಇರಲಿದೆ. ಕೌಟುಂಬಿಕವಾಗಿ ಮಿಶ್ರ ಫಲ. ಅದೃಷ್ಟ ಸಂಖ್ಯೆ: 9

ಭವಿಷ್ಯ ಮತ್ತು ಜ್ಯೋತಿಷ್ಯಕ್ಕೆ ಸಂಬಂಧಿಸಿದ ಲೇಖನ/ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್‌ (Click Here) ಮಾಡಿ

Horoscope Today

ತುಲಾ: ಆರೋಗ್ಯ ಪರಿಪೂರ್ಣವಾಗಿರಲಿದೆ ಅದರ ಹೊರತಾಗಿಯೂ ಅನೇಕ ವಿಷಯಗಳು ನಿಮಗೆ ಒತ್ತಡ ಉಂಟುಮಾಡುವ ಸಾಧ್ಯತೆ ಇದೆ. ಖರ್ಚು ಹೆಚ್ಚಾಗುವ ಸಾಧ್ಯತೆ ಇದೆ. ಗೌಪ್ಯ ವಿಷಯಗಳು ಬಹಿರಂಗವಾಗದಿರಲಿ. ಜಂಟಿ ಹೂಡಿಕೆ ವ್ಯವಹಾರದಲ್ಲಿ ತೊಡಗುವುದು ಬೇಡ. ಕುಟುಂಬದ ಅಸಹಕಾರದಿಂದ ಕಿರಿಕಿರಿಯಾಗಲಿದೆ. ಕೌಟುಂಬಿಕವಾಗಿ ಸಾಧಾರಣ ಫಲ. ಅದೃಷ್ಟ ಸಂಖ್ಯೆ: 2

Horoscope Today

ವೃಶ್ಚಿಕ : ಬಿಡುವಿಲ್ಲದ ಕಾರ್ಯದಿಂದ ಆಯಾಸ, ಇದರಿಂದಾಗಿ ಮಾನಸಿಕವಾಗಿ ಒತ್ತಡಕ್ಕೆ ಒಳಗಾಗುವ ಸಾಧ್ಯತೆ ಆದಷ್ಟು ವಿಶ್ರಾಂತಿ ಪಡೆಯಿರಿ.ಅನಗತ್ಯ ಖರ್ಚು ಇರಲಿದೆ. ಹಿರಿಯರಿಂದ ಮಾರ್ಗದರ್ಶನ ಸಿಗಲಿದೆ. ಕೌಟುಂಬಿಕವಾಗಿ ಮಿಶ್ರಫಲ. ಅದೃಷ್ಟ ಸಂಖ್ಯೆ: 4

Horoscope Today

ಧನಸ್ಸು: ಸಂತೋಷ ತುಂಬಿದ ವಾತಾವರಣ ಇರಲಿದೆ. ಮಕ್ಕಳಿಗಾಗಿ ಖರ್ಚು ಮಾಡುವ ಸಾಧ್ಯತೆ ಇದೆ. ಸಂಗಾತಿಯ ಆರೋಗ್ಯದ ಕುರಿತು ಕಾಳಜಿ ಇರಲಿ. ಕೌಟುಂಬಿಕವಾಗಿ ಮಿಶ್ರ ಫಲ. ಅದೃಷ್ಟ ಸಂಖ್ಯೆ: 1

Horoscope Today

ಮಕರ: ಆತ್ಮವಿಶ್ವಾಸದಿಂದ ಕಾರ್ಯದಲ್ಲಿ ಯಶಸ್ಸು ಸಿಗಲಿದೆ. ಈ ದಿನ ಹಣಕಾಸು ಪರಿಸ್ಥಿತಿಗಳು ಸುಧಾರಿಸುತ್ತವೆ. ನಿಮ್ಮಲ್ಲಿರುವ ನಾಯಕತ್ವ ಗುಣವನ್ನು ಗುರುತಿಸುವ ಸಾಧ್ಯತೆ ಇದೆ. ಉದ್ಯೋಗದ ಸ್ಥಳದಲ್ಲಿ ಪ್ರಶಂಸೆ ಸಿಗಲಿದೆ. ಕೌಟುಂಬಿಕವಾಗಿ ಶುಭಫಲ. ಅದೃಷ್ಟ ಸಂಖ್ಯೆ: 1

Horoscope Today

ಕುಂಭ: ಇಂದು ಕೈಗೊಂಡ ಧರ್ಮಾರ್ಥ ಕಾರ್ಯವು ಮಾನಸಿಕ ಶಾಂತಿ ಮತ್ತು ಆರಾಮ ತರುತ್ತದೆ. ಹಣಕಾಸು ವ್ಯವಹಾರ ಖಂಡಿತವಾಗಿಯೂ ವೃದ್ಧಿಯಾಗುತ್ತದೆ. ಆದರೆ ಅದೇ ಸಮಯದಲ್ಲಿ ಖರ್ಚು ಹೆಚ್ಚಾಗುತ್ತದೆ. ನಿಮ್ಮ ಬಗೆಗೆ ಕಾಳಜಿ ಮಾಡುವವರ ಬಗ್ಗೆ ಉದಾಸೀನತೆ ಬೇಡ. ದೀರ್ಘಕಾಲದ ಪ್ರಯತ್ನಕ್ಕೆ ಯಶಸ್ಸು ಕಟ್ಟಿಟ್ಟ ಬುತ್ತಿ. ಆರೋಗ್ಯ ಪರಿಪೂರ್ಣವಾಗಿರಲಿದೆ. ಕೌಟುಂಬಿಕವಾಗಿ ಶುಭಫಲ. ಅದೃಷ್ಟ ಸಂಖ್ಯೆ: 8

Horoscope Today

ಮೀನ: ವಿನಾಕಾರಣ ವಿಚಾರ ಮಾಡಿ ಆರೋಗ್ಯವನ್ನು ಹಾಳು ಮಾಡಿಕೊಳ್ಳುವುದು ಬೇಡ. ಅನಗತ್ಯವಾಗಿ ಹಣವನ್ನು ಖರ್ಚು ಮಾಡುವ ಸಾಧ್ಯತೆ ಇದೆ. ಸಂಗಾತಿಯ ಸಲಹೆ ಹಿತಕರವೆನಿಸುವುದು. ಆತ್ಮೀಯರೊಂದಿಗೆ ಕಾಲ ಕಳೆಯುವ ಸಾಧ್ಯತೆ ಇದೆ. ದಿನದ ಮಟ್ಟಿಗೆ ಆರೋಗ್ಯ ಹದಗೆಡುವ ಸಾಧ್ಯತೆ ಇದೆ. ಕೌಟುಂಬಿಕವಾಗಿ ಶುಭಫಲ. ಅದೃಷ್ಟ ಸಂಖ್ಯೆ: 6

Horoscope Today

ವಿದ್ವಾನ್ ಶ್ರೀ ನವೀನಶಾಸ್ತ್ರಿ ರಾ. ಪುರಾಣಿಕ
ಖ್ಯಾತ ಜ್ಯೋತಿಷಿ ಹಾಗೂ ಉಪನ್ಯಾಸಕರು

M: 9481854580 | pnaveenshastri@gmail.com

Continue Reading

ಪ್ರಮುಖ ಸುದ್ದಿ

Muhammad Usman : ಅಂತಾರಾಷ್ಟ್ರೀಯ ಕ್ರಿಕೆಟ್​ಗೆ ವಿದಾಯ ಹೇಳಿದ ಯುಎಇ ಕ್ರಿಕೆಟಿಗ ಉಸ್ಮಾನ್​

Muhammad Usman: ಅಂತಾರಾಷ್ಟ್ರೀಯ ಕ್ರಿಕೆಟ್​ನಲ್ಲಿ ಯುಎಇಯನ್ನು ಪ್ರತಿನಿಧಿಸುವ ಮೊದಲು, ಎಡಗೈ ಬ್ಯಾಟರ್​ ಜನವರಿ 2016 ರಲ್ಲಿ ನೆದರ್ಲ್ಯಾಂಡ್ಸ್ ವಿರುದ್ಧ ಪ್ರಥಮ ದರ್ಜೆ ಕ್ರಿಕೆಟ್​ಗೆ ಪಾದಾರ್ಪಣೆ ಮಾಡಿದ್ದರು. ಅವರು ಯುಎಇ ಪರ ಒಟ್ಟು 5 ಪ್ರಥಮ ದರ್ಜೆ ಪಂದ್ಯಗಳನ್ನು ಆಡಿದ್ದಾರೆ.

VISTARANEWS.COM


on

Muhammad Usman
Koo

ಬೆಂಗಳೂರು: ಯುಎಇ ಬ್ಯಾಟರ್​ ಮುಹಮ್ಮದ್ ಉಸ್ಮಾನ್ (Muhammad Usman) ಶುಕ್ರವಾರ (ಜೂನ್ 28) ಅಂತರರಾಷ್ಟ್ರೀಯ ಕ್ರಿಕೆಟ್​ಗೆ ನಿವೃತ್ತಿ ಹೇಳಿದ್ದಾರೆ. ಆ ತಂಡದ ಮಧ್ಯಮ ಕ್ರಮಾಂಕದ ಬ್ಯಾಟರ್​ ಅಗಿದ್ದ ಅವರು ಒಟ್ಟು 85 ಅಂತರರಾಷ್ಟ್ರೀಯ ಪಂದ್ಯಗಳಲ್ಲಿ ಪಾಲ್ಗೊಂಡಿದ್ದರು. ಪಾಕಿಸ್ತಾನದ ಲಾಹೋರ್​ನಲ್ಲಿ ಜನಿಸಿದ 38ರ ಹರೆಯದ ಉಸ್ಮಾನ್​ 2016ರಿಂದ 2022ರವರೆಗೆ ಯುಎಇ ಪರ 38 ಏಕದಿನ ಮತ್ತು 47 ಟಿ20 ಪಂದ್ಯಗಳನ್ನು ಆಡಿದ್ದಾರೆ. ಅವರು ಫೆಬ್ರವರಿ 2016 ರಲ್ಲಿ ನೆದರ್ಲ್ಯಾಂಡ್ಸ್ ವಿರುದ್ಧದ ಟಿ 20 ಐ ಮೂಲಕ ಯುಎಇ ಪರ ಪಾದಾರ್ಪಣೆ ಮಾಡಿದರು. ಅದೇ ವರ್ಷದ ಆಗಸ್ಟ್​​ನಲ್ಲಿ ಮುಹಮ್ಮದ್ ಉಸ್ಮಾನ್ ಎಡಿನ್​ಬರ್ಗ್​​ನಲ್ಲಿ ಸ್ಕಾಟ್ಲೆಂಡ್ ವಿರುದ್ಧದ ಪಂದ್ಯದ ಮೂಲಕ ಏಕದಿನ ಕ್ರಿಕೆಟ್​ಗೆ ಪದಾ ರ್ಪಣೆ ಮಾಡಿದರು.

ಅಂತಾರಾಷ್ಟ್ರೀಯ ಕ್ರಿಕೆಟ್​ನಲ್ಲಿ ಯುಎಇಯನ್ನು ಪ್ರತಿನಿಧಿಸುವ ಮೊದಲು, ಎಡಗೈ ಬ್ಯಾಟರ್​ ಜನವರಿ 2016 ರಲ್ಲಿ ನೆದರ್ಲ್ಯಾಂಡ್ಸ್ ವಿರುದ್ಧ ಪ್ರಥಮ ದರ್ಜೆ ಕ್ರಿಕೆಟ್​ಗೆ ಪಾದಾರ್ಪಣೆ ಮಾಡಿದ್ದರು. ಅವರು ಯುಎಇ ಪರ ಒಟ್ಟು 5 ಪ್ರಥಮ ದರ್ಜೆ ಪಂದ್ಯಗಳನ್ನು ಆಡಿದ್ದಾರೆ.

ಮೊಹಮ್ಮದ್ ಉಸ್ಮಾನ್ 38 ಏಕದಿನ ಪಂದ್ಯಗಳಲ್ಲಿ 31.50 ಸರಾಸರಿಯಲ್ಲಿ 1008 ರನ್ ಗಳಿಸಿದ್ದಾರೆ. ಅವರು 50 ಓವರ್​ಗಳ ಸ್ವರೂಪದಲ್ಲಿ ಒಂದು ಶತಕ ಮತ್ತು ಐದು ಅರ್ಧಶತಕಗಳನ್ನು ಗಳಿಸಿದ್ದಾರೆ. ಟಿ20ಐನಲ್ಲಿ ದಕ್ಷಿಣ ಆಫ್ರಿಕಾ 47 ಪಂದ್ಯಗಳಲ್ಲಿ ಮೂರು ಅರ್ಧಶತಕಗಳ ಸಹಾಯದಿಂದ 891 ರನ್ ಗಳಿಸಿದೆ.

ಅವರು 2016 ರ ಏಷ್ಯಾ ಕಪ್​ಗಾಗಿ ಯುಎಇ ತಂಡದ ಭಾಗವಾಗಿದ್ದರು. ಅವರು 7 ಪಂದ್ಯಗಳಲ್ಲಿ 176 ರನ್ ಗಳಿಸಿದ ನಂತರ ಯುಎಇಯ ಅತಿ ಹೆಚ್ಚು ರನ್ ಗಳಿಸಿದ ಮತ್ತು ಒಟ್ಟಾರೆ ಮೂರನೇ ಅತಿ ಹೆಚ್ಚು ರನ್ ಗಳಿಸಿದ ಆಟಗಾರನಾಗಿ ಪಂದ್ಯಾವಳಿಯನ್ನು ಮುಗಿಸಿದ್ದರು. 5 ಪ್ರಥಮ ದರ್ಜೆ ಪಂದ್ಯಗಳಲ್ಲಿ, ಅನುಭವಿ ಬ್ಯಾಟ್ಸ್ಮನ್ ಶತಕದ ಸಹಾಯದಿಂದ 217 ರನ್ ಗಳಿಸಿದ್ದಾರೆ. 2022ರ ಫೆಬ್ರವರಿಯಲ್ಲಿ ಒಮಾನ್ ಹಾಗೂ ನೇಪಾಳ ವಿರುದ್ಧ ಏಕದಿನ ಹಾಗೂ ಟಿ20ಐನಲ್ಲಿ ಕೊನೆಯ ಬಾರಿ ಆಡಿದ್ದರು.

ಇದು ನಂಬಲಾಗದ ಪ್ರಯಾಣ: ಮುಹಮ್ಮದ್ ಉಸ್ಮಾನ್

ಮುಹಮ್ಮದ್ ಉಸ್ಮಾನ್ ಅವರು ಅಂತರರಾಷ್ಟ್ರೀಯ ಕ್ರಿಕೆಟ್​​ನಲ್ಲಿ ತಮ್ಮ ಪ್ರಯಾಣವನ್ನು ನಂಬಲಾಗದ ಎಂದು ಕರೆದರು ಮತ್ತು ಅವರ ಕ್ರಿಕೆಟ್ ಪ್ರಯಾಣದಲ್ಲಿ ಪಾತ್ರವಹಿಸಿದ ಎಲ್ಲರಿಗೂ ಕೃತಜ್ಞತೆ ಸಲ್ಲಿಸಿದರು. ಅವರು ತಮ್ಮ ಆಟದ ವೃತ್ತಿಜೀವನದ ಅಂತ್ಯದ ನಂತರವೂ ಆಟದೊಂದಿಗೆ ಸಂಬಂಧ ಹೊಂದುವ ಬಯಕೆಯನ್ನು ವ್ಯಕ್ತಪಡಿಸಿದರು.

ಇದನ್ನೂ ಓದಿ: Virat Kohli : ಫಾರ್ಮ್​ ಕಳೆದುಕೊಂಡಿರುವ ವಿರಾಟ್​ ಕೊಹ್ಲಿಯ ಬೆಂಬಲಕ್ಕೆ ನಿಂತ ಗಂಗೂಲಿ

ಯುಎಇ ಕ್ರಿಕೆಟ್ ತಂಡ ಮತ್ತು ಕ್ರಿಕೆಟ್ ಮಂಡಳಿಯೊಂದಿಗೆ ಇದು ನಂಬಲಾಗದ ಪ್ರಯಾಣವಾಗಿದೆ. ನನ್ನ ತಂಡದ ಸದಸ್ಯರು, ತರಬೇತುದಾರರು ಮತ್ತು ಇತರ ಸಹಾಯಕ ಸಿಬ್ಬಂದಿ ಸೇರಿದಂತೆ ನನ್ನ ಪ್ರಯಾಣದಲ್ಲಿ ಪಾತ್ರ ವಹಿಸಿದ ಎಲ್ಲರಿಗೂ ನಾನು ಧನ್ಯವಾದಗಳನ್ನು ಅರ್ಪಿಸುತ್ತೇನೆ. 85 ಅಂತಾರಾಷ್ಟ್ರೀಯ ಪಂದ್ಯಗಳಿಗೆ ಯುಎಇಯನ್ನು ಪ್ರತಿನಿಧಿಸುವ ಅವಕಾಶ ಸಿಕ್ಕಿದ್ದು ನನ್ನ ಅದೃಷ್ಟ ಮತ್ತು ಹೆಮ್ಮೆ ಎನಿಸುತ್ತದೆ ಎಂದುಹೇಳಿದರು.

ನಾನು ಕ್ರೀಡೆಯೊಂದಿಗೆ ಬೇರೆ ಸಂಬಂಧ ಹೊಂದಲು ಬಯಸುವುದರಿಂದ ನನ್ನ ಜೀವನದ ಮುಂದಿನ ಅಧ್ಯಾಯವನ್ನು ಎದುರು ನೋಡುತ್ತಿದ್ದೇನೆ. ಯುಎಇ ತಂಡ ಮತ್ತು ಆಟಗಾರರಿಗೆ ದೇಶದಲ್ಲಿ ಆಟಕ್ಕೆ ಬಹಳ ರೋಮಾಂಚನಕಾರಿ ಸಮಯದಲ್ಲಿ ನಾನು ಶುಭ ಹಾರೈಸಲು ಬಯಸುತ್ತೇನೆ ಎಂದು ಮುಹಮ್ಮದ್ ಉಸ್ಮಾನ್ ಹೇಳಿದರು.

Continue Reading

ದೇಶ

UGC NET Exam: ರದ್ದಾಗಿದ್ದ ಯುಜಿಸಿ ನೆಟ್‌ ಪರೀಕ್ಷೆಗೆ ಹೊಸ ದಿನಾಂಕ ಘೋಷಣೆ; ಪರೀಕ್ಷೆಗೆ ಹೊಸ ವಿಧಾನ, ಇಲ್ಲಿದೆ ವಿವರ‌

UGC NET Exam: ರಾಷ್ಟ್ರೀಯ ಪರೀಕ್ಷಾ ಸಂಸ್ಥೆ (NTA) ನಡೆಸಿದ ವಿಶ್ವವಿದ್ಯಾಲಯ ಧನ ಸಹಾಯ ಆಯೋಗ-ನೆಟ್‌ 2024 ಪರೀಕ್ಷೆಯಲ್ಲಿ ಅಕ್ರಮ ನಡೆದಿದೆ ಎಂಬ ಕಾರಣಕ್ಕಾಗಿ ಕೇಂದ್ರ ಶಿಕ್ಷಣ ಸಚಿವಾಲಯವು ಪರೀಕ್ಷೆಯನ್ನು ರದ್ದುಗೊಳಿಸಿದೆ. ಜೂನ್‌ 18ರಂದು ಕರ್ನಾಟಕ ಸೇರಿ ದೇಶಾದ್ಯಂತ ಸುಮಾರು 11 ಲಕ್ಷಕ್ಕೂ ಅಧಿಕ ಅಭ್ಯರ್ಥಿಗಳು ನೆಟ್‌ ಬರೆದಿದ್ದರು. ಇದನ್ನು ಬಳಿಕ ರದ್ದುಗೊಳಿಸಲಾಗಿತ್ತು. ಈಗ ಹೊಸ ದಿನಾಂಕ ಘೋಷಣೆ ಮಾಡಲಾಗಿದೆ.

VISTARANEWS.COM


on

UGC NET Exam
Koo

ನವದೆಹಲಿ: ಅಕ್ರಮ ನಡೆದಿರುವ ಹಿನ್ನೆಲೆಯಲ್ಲಿ ರದ್ದಾಗಿದ್ದ ಯುಜಿಸಿ ನೆಟ್‌ (ಯುಜಿಸಿ-ರಾಷ್ಟ್ರೀಯ ಅರ್ಹತಾ ಪರೀಕ್ಷೆ) ಪರೀಕ್ಷೆಗೆ ರಾಷ್ಟ್ರೀಯ ಪರೀಕ್ಷಾ ಸಂಸ್ಥೆಯು (NTA) ಹೊಸ ದಿನಾಂಕವನ್ನು ಘೋಷಣೆ ಮಾಡಿದೆ. ಯುಜಿಸಿ ನೆಟ್‌ ಪರೀಕ್ಷೆಯು ಆಗಸ್ಟ್‌ 21 ಹಾಗೂ ಸೆಪ್ಟೆಂಬರ್‌ 4ರಂದು ನಡೆಸಲಿದೆ. ಅದರಲ್ಲೂ, ಪರೀಕ್ಷೆಯಲ್ಲಿ ಅಕ್ರಮ ತಡೆಯುವ ದಿಸೆಯಲ್ಲಿ ಪೆನ್‌ ಹಾಗೂ ಪೇಪರ್‌ ಪದ್ಧತಿ ಬದಲಾಗಿ, ಕಂಪ್ಯೂಟರ್‌ ಆಧಾರಿತವಾಗಿ ಪರೀಕ್ಷೆ ನಡೆಸಲು ತೀರ್ಮಾನಿಸಲಾಗಿದೆ. ಇದರ ಬೆನ್ನಲ್ಲೇ, ಆಲ್‌ ಇಂಡಿಯಾ ಆಉಷ್‌ ಪೋಸ್ಟ್‌ ಗ್ರ್ಯಾಜುಯೇಟ್‌ ಪ್ರವೇಶ ಪರೀಕ್ಷೆಯು (AIAPGET) ಜುಲೈ 6ರಂದು ನಡೆಸಲು ತೀರ್ಮಾನಿಸಲಾಗಿದೆ.

ರಾಷ್ಟ್ರೀಯ ಪರೀಕ್ಷಾ ಸಂಸ್ಥೆ (NTA) ನಡೆಸಿದ ವಿಶ್ವವಿದ್ಯಾಲಯ ಧನ ಸಹಾಯ ಆಯೋಗ-ನೆಟ್‌ 2024 ಪರೀಕ್ಷೆಯಲ್ಲಿ ಅಕ್ರಮ ನಡೆದಿದೆ ಎಂಬ ಕಾರಣಕ್ಕಾಗಿ ಕೇಂದ್ರ ಶಿಕ್ಷಣ ಸಚಿವಾಲಯವು ಪರೀಕ್ಷೆಯನ್ನು ರದ್ದುಗೊಳಿಸಿತ್ತು. ನ್ಯಾಷನಲ್ ಸೈಬರ್‌ ಕ್ರೈಮ್‌ ಥ್ರೆಟ್‌ ಅನಾಲಿಟಿಕ್ಸ್‌ ಯುನಿಟ್‌ ಆಫ್‌ ಇಂಡಿಯನ್‌ ಸೈಬರ್‌ ಕ್ರೈಮ್‌ ಕೋ-ಆರ್ಡಿನೇಷನ್‌ ಸೆಂಟರ್‌ನಿಂದ ಯುಜಿಸಿಗೆ ಪರೀಕ್ಷೆಯಲ್ಲಿ ಅಕ್ರಮ ನಡೆದಿರುವ ಕುರಿತು ಮಾಹಿತಿ ಲಭ್ಯವಾದ ಹಿನ್ನೆಲೆಯಲ್ಲಿ ಪರೀಕ್ಷೆಯನ್ನು ರದ್ದುಗೊಳಿಸಲಾಗಿತ್ತು.

ಜೂನ್‌ 18ರಂದು ಕರ್ನಾಟಕ ಸೇರಿ ದೇಶಾದ್ಯಂತ 317 ನಗರಗಳ 1,205 ಪರೀಕ್ಷಾ ಕೇಂದ್ರಗಳಲ್ಲಿ ಪರೀಕ್ಷೆ ನಡೆಸಲಾಗಿತ್ತು. ಸುಮಾರು 11 ಲಕ್ಷಕ್ಕೂ ಅಧಿಕ ವಿದ್ಯಾರ್ಥಿಗಳು ನೆಟ್‌ಗೆ ಹಾಜರಾಗಿದ್ದರು. ಈಗ ಪರೀಕ್ಷೆಯನ್ನು ರದ್ದುಗೊಳಿಸಿರುವ ಕಾರಣ ಶೀಘ್ರದಲ್ಲೇ ಹೊಸ ದಿನಾಂಕ ಘೋಷಿಸಲಾಗುತ್ತದೆ ಎಂದು ತಿಳಿದುಬಂದಿತ್ತು. ವಿಶ್ವವಿದ್ಯಾಲಯಗಳು ಹಾಗೂ ಉನ್ನತ ಶಿಕ್ಷಣ ಸಂಸ್ಥೆಗಳಲ್ಲಿ ಪಿಎಚ್‌.ಡಿ ಪ್ರವೇಶಾತಿಗೆ ಸಾಮಾನ್ಯ ಪ್ರವೇಶ ಪರೀಕ್ಷೆಯ (CET) ಬದಲು ಅಭ್ಯರ್ಥಿಯು ನೆಟ್‌ನಲ್ಲಿ ಗಳಿಸಿದ ಅಂಕಗಳನ್ನು ಪರಿಗಣಿಸಲು ಯುಜಿಸಿಯು ಈಗಾಗಲೇ ಅನುಮೋದನೆ ನೀಡಿದೆ. ಹಾಗಾಗಿ, ಅಭ್ಯರ್ಥಿಗಳಿಗೆ ನೆಟ್‌ ಪ್ರಮುಖ ಸಂಗತಿಯಾಗಿದೆ.

ಜಂಟಿ ಸಿಎಸ್‌ಐಆರ್‌ ಯುಜಿಸಿ ನೆಟ್‌ ಪರೀಕ್ಷೆಗೂ ದಿನಾಂಕ ಘೋಷಣೆ

ದೇಶದ ಕಾಲೇಜುಗಳು ಹಾಗೂ ವಿಶ್ವವಿದ್ಯಾಲಯಗಳಲ್ಲಿ ಜ್ಯೂನಿಯರ್‌ ರಿಸರ್ಚ್‌ ಫೆಲೋಶಿಪ್‌ (JRF) ಪಡೆಯಲು ಹಾಗೂ ಉಪನ್ಯಾಸಕರಾಗಿ ಅಥವಾ ಸಹಾಯ ಪ್ರಾಧ್ಯಾಪಕರಾಗಿ ಆಯ್ಕೆಯಾಗಲು ಅರ್ಹತೆ ಪಡೆಯಬೇಕಾದರೆ ಜಂಟಿ ಸಿಎಸ್‌ಐಆರ್‌ ಯುಜಿಸಿ ನೆಟ್‌ ಪರೀಕ್ಷೆಯಲ್ಲಿ ತೇರ್ಗಡೆ ಹೊಂದಬೇಕು. ಜೂನ್‌ 25 ಹಾಗೂ ಜೂನ್‌ 27ರಂದು ಪರೀಕ್ಷೆ ನಡೆಸಲು ತೀರ್ಮಾನಿಸಲಾಗಿತ್ತು. ಈ ಪರೀಕ್ಷೆಯನ್ನು ಜುಲೈ 25-27ರವರೆಗೆ ನಡೆಸಲು ತೀರ್ಮಾನಿಸಲಾಗಿದೆ.

ಇದನ್ನೂ ಓದಿ: Joint CSIR UGC NET: ನೆಟ್‌ ಪರೀಕ್ಷೆ ರದ್ದಾದ ಬೆನ್ನಲ್ಲೇ ಜಂಟಿ ಸಿಎಸ್‌ಐಆರ್‌ ಯುಜಿಸಿ ನೆಟ್‌ ಮುಂದೂಡಿಕೆ!

Continue Reading
Advertisement
karnataka weather Forecast
ಮಳೆ8 mins ago

Karnataka Weather : ಕರಾವಳಿಯಲ್ಲಿ ಮುಂಗಾರು ಪ್ರಬಲ; ಮುಂದುವರಿಯಲಿದೆ ಮಳೆ ಅಬ್ಬರ

Bridge Collapse
ದೇಶ12 mins ago

Bridge Collapse: ಬಿಹಾರದಲ್ಲಿ ಮತ್ತೊಂದು ನಿರ್ಮಾಣ ಹಂತದ ಸೇತುವೆ ಕುಸಿತ; 9 ದಿನದಲ್ಲಿ 5ನೇ ಪ್ರಕರಣ!

Muhammad Usman
ಪ್ರಮುಖ ಸುದ್ದಿ2 hours ago

Muhammad Usman : ಅಂತಾರಾಷ್ಟ್ರೀಯ ಕ್ರಿಕೆಟ್​ಗೆ ವಿದಾಯ ಹೇಳಿದ ಯುಎಇ ಕ್ರಿಕೆಟಿಗ ಉಸ್ಮಾನ್​

Dina Bhavishya
ಭವಿಷ್ಯ2 hours ago

Dina Bhavishya : ಈ ದಿನ ಆತ್ಮೀಯರೊಂದಿಗೆ ಕಾಲ ಕಳೆಯುವಿರಿ

UGC NET Exam
ದೇಶ6 hours ago

UGC NET Exam: ರದ್ದಾಗಿದ್ದ ಯುಜಿಸಿ ನೆಟ್‌ ಪರೀಕ್ಷೆಗೆ ಹೊಸ ದಿನಾಂಕ ಘೋಷಣೆ; ಪರೀಕ್ಷೆಗೆ ಹೊಸ ವಿಧಾನ, ಇಲ್ಲಿದೆ ವಿವರ‌

Vodafone Idea
ದೇಶ7 hours ago

Vodafone Idea: ಜಿಯೋ, ಏರ್‌ಟೆಲ್‌ ಬೆನ್ನಲ್ಲೇ ವೋಡಾಫೋನ್‌ ಐಡಿಯಾ ಪ್ಲಾನ್‌ ಬೆಲೆ ಏರಿಕೆ; ಹೀಗಿದೆ ವಿವರ

T20 World Cup 2024
ಪ್ರಮುಖ ಸುದ್ದಿ7 hours ago

T20 World Cup 2024 : ಭಾರತ ತಂಡವನ್ನು ಟೀಕಿಸಿದ ಮೈಕೆಲ್​ ವಾನ್​ಗೆ ತಿರುಗೇಟು ಕೊಟ್ಟ ಗಂಗೂಲಿ

CM SIddaramaiah
ಪ್ರಮುಖ ಸುದ್ದಿ7 hours ago

Siddaramaiah: ಅಮಿತ್‌ ಶಾ-ಸಿದ್ದರಾಮಯ್ಯ ಭೇಟಿ; ರಾಜ್ಯದ 5 ನಗರಗಳಲ್ಲಿ ಸೇಫ್‌ ಸಿಟಿ ಯೋಜನೆ ಜಾರಿಗೆ ಒತ್ತಾಯ

Religious Freedom
ದೇಶ9 hours ago

Religious Freedom: ಧಾರ್ಮಿಕ ಸ್ವಾತಂತ್ರ್ಯದ ಕುರಿತು ಅಮೆರಿಕ ಹುಸಿ ಕಳವಳ; ಭಾರತ ತಿರುಗೇಟು

Virat Kohli
ಪ್ರಮುಖ ಸುದ್ದಿ9 hours ago

Virat Kohli : ಫಾರ್ಮ್​ ಕಳೆದುಕೊಂಡಿರುವ ವಿರಾಟ್​ ಕೊಹ್ಲಿಯ ಬೆಂಬಲಕ್ಕೆ ನಿಂತ ಗಂಗೂಲಿ

Sharmitha Gowda in bikini
ಕಿರುತೆರೆ9 months ago

Geetha Serial Kannada: ನಿದ್ದೆ ಕದ್ದ ಚೋರಿ! ನಟಿ `ಭಾನುಮತಿ’ ಹಾಟ್‌ ಪೋಟೊಗಳಿಗೆ ಫ್ಯಾನ್ಸ್ ಫುಲ್ ಫಿದಾ

Kannada Serials
ಕಿರುತೆರೆ9 months ago

Kannada Serials TRP: 2ನೇ ಸ್ಥಾನದಲ್ಲಿ 2 ಧಾರಾವಾಹಿಗಳು; ಟಿಆರ್‌ಪಿ ರೇಸ್‌ನಲ್ಲಿಲ್ಲ ಭಾಗ್ಯಲಕ್ಷ್ಮೀ!

Bigg Boss- Saregamapa 20 average TRP
ಕಿರುತೆರೆ8 months ago

Kannada Serials TRP: ಏಳನೇ ಸ್ಥಾನಕ್ಕೆ ʻಅಮೃತಧಾರೆʼ ಕುಸಿತ; ಬಿಗ್‌ ಬಾಸ್‌-ಸರಿಗಮಪ ಟಿಆರ್‌ಪಿ ಎಷ್ಟು?

galipata neetu
ಕಿರುತೆರೆ7 months ago

Kanyadana Serial: ಕಿರುತೆರೆಗೆ ಮತ್ತೆ ಎಂಟ್ರಿ ಕೊಟ್ಟ ʻಗಾಳಿಪಟʼ ಖ್ಯಾತಿಯ ʻನೀತುʼ!

Kannada Serials
ಕಿರುತೆರೆ9 months ago

Kannada Serials TRP: ನಾಲ್ಕನೇ ಸ್ಥಾನಕ್ಕೆ ಕುಸಿತ ಕಂಡ ʻಸೀತಾ ರಾಮʼ; ಟಿಆರ್‌ಪಿ ರೇಸ್‌ಗೆ ʻಭಾಗ್ಯಲಕ್ಷ್ಮಿʼ ಬ್ಯಾಕ್‌!

Kannada Serials
ಕಿರುತೆರೆ9 months ago

Kannada Serials TRP: ಟಿಆರ್‌ಪಿಯಲ್ಲಿ ʻಭಾಗ್ಯಲಕ್ಷ್ಮೀʼ ಹವಾ; ʻಪುಟ್ಟಕ್ಕನ ಮಕ್ಕಳುʼ ಧಾರಾವಾಹಿಗೆ ಸಂಕಷ್ಟ!

Bigg Boss' dominates TRP; Sita Rama fell to the sixth position
ಕಿರುತೆರೆ8 months ago

Kannada Serials TRP: ಟಿಆರ್‌ಪಿಯಲ್ಲಿ ʻಬಿಗ್ ಬಾಸ್ʼದೇ ಮೇಲುಗೈ; 6ನೇ ಸ್ಥಾನಕ್ಕೆ ಕುಸಿದ ʻಸೀತಾ ರಾಮʼ

geetha serial Dhanush gowda engagement
ಕಿರುತೆರೆ7 months ago

Dhanush Gowda: ಗೀತಾ ಧಾರಾವಾಹಿ ನಟನ ನಿಶ್ಚಿತಾರ್ಥ; ಭವ್ಯಾಳ ಕಮೆಂಟ್‌ ಬಾಕ್ಸ್‌ ಆಫ್‌!

varun
ಕಿರುತೆರೆ7 months ago

Brindavana Serial: ʼಬೃಂದಾವನʼ ಧಾರಾವಾಹಿಯಲ್ಲಿ ದೊಡ್ಡ ಟ್ವಿಸ್ಟ್‌; ಪ್ರಮುಖ ಪಾತ್ರಧಾರಿಯೇ ಬದಲು

Kannada Serials
ಕಿರುತೆರೆ10 months ago

Kannada Serials TRP: ಟಿಆರ್‌ಪಿಯಲ್ಲಿ ಏರಿಕೆ ಕಂಡ ʻಅಮೃತಧಾರೆʼ; ʻಗಟ್ಟಿಮೇಳʼಕ್ಕೆ ನಾಲ್ಕನೇ ಸ್ಥಾನ!

karnataka Weather Forecast
ಮಳೆ12 hours ago

Karnataka Weather : ಅಬ್ಬಬ್ಬಾ.. ಮುಲ್ಕಿಯಲ್ಲಿ 30 ಸೆಂ.ಮೀ ಮಳೆ ದಾಖಲು; ವಾರಾಂತ್ಯದಲ್ಲೂ ಭಾರಿ ವರ್ಷಧಾರೆ

karnataka Rain
ಮಳೆ19 hours ago

Karnataka Rain : ಭಾರಿ ಮಳೆಗೆ ಪಾತಾಳ ಸೇರಿದ ಬಾವಿ; ಅಲೆಗಳ ಹೊಡೆತಕ್ಕೆ ಸಮುದ್ರಪಾಲಾದ ಮನೆ

Karnataka Weather Forecast
ಮಳೆ1 day ago

Karnataka Weather : ಭಾರಿ ಮಳೆ ಹಿನ್ನೆಲೆ ದಕ್ಷಿಣ ಕನ್ನಡಕ್ಕೆ ರೆಡ್ ಅಲರ್ಟ್; ಶುಕ್ರವಾರವೂ ಶಾಲೆಗಳಿಗೆ ರಜೆ ಘೋಷಣೆ

karnataka Weather Forecast
ಮಳೆ2 days ago

Karnataka Weather : ಭಾರಿ ಮಳೆಗೆ ಸೇತುವೆಯಿಂದ ಹೊಳೆಗೆ ಬಿದ್ದ ಕಾರು; ಮರ ಹಿಡಿದು ಪ್ರಾಣ ಉಳಿಸಿಕೊಂಡ ಸವಾರರು

Heart Attack
ಕೊಡಗು2 days ago

Heart Attack : ಕೊಡಗಿನಲ್ಲಿ ಹೃದಯಾಘಾತಕ್ಕೆ ಯುವತಿ ಬಲಿ; ಹೆಚ್ಚಾಯ್ತು ಅಲ್ಪಾಯುಷ್ಯದ ಭಯ

karnataka Rains Effected
ಮಳೆ2 days ago

Karnataka Rain : ಧಾರಾಕಾರ ಮಳೆಗೆ ಸಡಿಲಗೊಂಡ ಗುಡ್ಡಗಳು; ಧರೆ ಕುಸಿದು ಮಣ್ಣಿನಡಿ ಸಿಲುಕಿದ ಇಬ್ಬರು ಮಕ್ಕಳು

karnataka Weather Forecast
ಮಳೆ4 days ago

Karnataka Weather : ಕರಾವಳಿಯಲ್ಲಿ ಮುಂದುವರಿದ ವರುಣಾರ್ಭಟ; ಸಾಂಪ್ರದಾಯಿಕ ಮೀನುಗಾರಿಕೆಗೂ ಬ್ರೇಕ್

karnataka weather Forecast
ಮಳೆ1 week ago

Karnataka Weather : ರಭಸವಾಗಿ ಹರಿಯುವ ನೀರಲ್ಲಿ ಸಿಲುಕಿದ ಬೊಲೆರೋ; ಬಿರುಗಾಳಿ ಸಹಿತ ಮಳೆ ಎಚ್ಚರಿಕೆ

International Yoga Day 2024
ಕರ್ನಾಟಕ1 week ago

International Yoga Day 2024: ಎಲ್ಲೆಲ್ಲೂ ಯೋಗಾಯೋಗ‌ಕ್ಕೆ ಮಂಡಿಯೂರಿದ ಜನತೆ

Karnataka Weather Forecast
ಮಳೆ1 week ago

Karnataka Weather : ಬಾಗಲಕೋಟೆ, ಬೆಂಗಳೂರು ಸೇರಿ ಚಿಕ್ಕಮಗಳೂರಲ್ಲಿ ಸುರಿದ ಗಾಳಿ ಸಹಿತ ಮಳೆ

ಟ್ರೆಂಡಿಂಗ್‌