government decided to not to consider ksrtc employees as govt employeesKSRTC Employees News : ಸಾರಿಗೆ ನೌಕರರರಿಗೆ ಸರ್ಕಾರಿ ನೌಕರರಾಗುವ ಭಾಗ್ಯವಿಲ್ಲ! - Vistara News

ನೌಕರರ ಕಾರ್ನರ್

KSRTC Employees News : ಸಾರಿಗೆ ನೌಕರರರಿಗೆ ಸರ್ಕಾರಿ ನೌಕರರಾಗುವ ಭಾಗ್ಯವಿಲ್ಲ!

ಸಾರಿಗೆ ನೌಕರರನ್ನು ಸರ್ಕಾರಿ ನೌಕರರೆಂದು ಪರಿಗಣಿಸುವ ಪ್ರಸ್ತಾಪ ಸರ್ಕಾರದ ಮುಂದಿಲ್ಲ (KSRTC Employees News) ಎಂದು ಸಾರಿಗೆ ಸಚಿವ ರಾಮಲಿಂಗರೆಡ್ಡಿ ವಿಧಾನಸಭೆಯಲ್ಲಿ ಹೇಳಿದ್ದಾರೆ.

VISTARANEWS.COM


on

KSRTC Employees News
ಮಹತ್ವದ, ಕುತೂಹಲಕರ ಸುದ್ದಿಗಾಗಿ ಫಾಲೊ ಮಾಡಿ
Koo

ಬೆಂಗಳೂರು: ರಾಜ್ಯದ ಸಾರಿಗೆ ಸಂಸ್ಥೆ ನೌಕರರನ್ನು ಸರ್ಕಾರಿ ನೌಕರರೆಂದು ಪರಿಗಣಿಸುವ ಪ್ರಸ್ತಾಪ ಸರ್ಕಾರದ ಮುಂದಿಲ್ಲ (KSRTC Employees News) ಎಂದು ಸಾರಿಗೆ ಸಚಿವ ರಾಮಲಿಂಗರೆಡ್ಡಿ (ramalinga reddy) ಸ್ಪಷ್ಟಪಡಿಸಿದ್ದಾರೆ.

ತಮ್ಮನ್ನು ಸರ್ಕಾರಿ ನೌಕರರೆಂದು ಪರಿಗಣಿಸಿ, ಸರ್ಕಾರಿ ನೌಕರರಿಗೆ ನೀಡಲಾಗುವ ಎಲ್ಲ ಸವಲತ್ತುಗಳನ್ನು ಒದಗಿಸಬೇಕೆಂದು ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ನಿಗಮ (ಕೆಎಸ್‌ಆರ್‌ಟಿಸಿ) ಮತ್ತು ಬೆಂಗಳೂರು ಮಹಾನಗರ ಸಾರಿಗೆ ಸಂಸ್ಥೆ (ಬಿಎಂಟಿಸಿ) ನೌಕರರು ಒತ್ತಾಯಿಸಿಕೊಂಡೇ ಬಂದಿದ್ದರು. ನೂತನ ಸರ್ಕಾರ ಈ ನಿಟ್ಟಿನಲ್ಲಿ ಕ್ರಮ ತೆಗೆದುಕೊಳ್ಳಬಹುದೆಂದು ಬಹಳ ನಿರೀಕ್ಷೆ ಇಟ್ಟುಕೊಂಡಿದ್ದರು. ಆದರೆ ಅವರಿಗೆ ಈಗ ನಿರಾಸೆಯಾಗಿದೆ.

2020ರಲ್ಲಿ ಸಾರಿಗೆ ನಿಗಮದ ನೌಕರರ ಇದೇ ಬೇಡಿಕೆಯನ್ನು ಮುಂದಿಷ್ಟುಕೊಂಡು ಬೃಹತ್‌ ಪ್ರತಿಭಟನೆ ನಡೆಸಿದ್ದರು. ಸಾರಿಗೆ ನೌಕರರಿಗೆ 6ನೇ ವೇತನ ಆಯೋಗಕ್ಕೆ ಸಮನಾದ ವೇತನ ನೀಡಲು ಸರಕಾರ ಸಿದ್ಧ ಆದರೆ ಅವರನ್ನು ಸರ್ಕಾರಿ ನೌಕರರಾಗಿ ಪರಿಗಣಿಸಲು ಸಾಧ್ಯವಿಲ್ಲ ಎಂದು ಆಗಿನ ಸಾರಿಗೆ ಸಚಿವ ಲಕ್ಷಣ್‌ ಸವದಿ ಹೇಳಿದ್ದರು. ಈ ಸಂದರ್ಭದಲ್ಲಿ ನೌಕರರ ಪ್ರತಿಭಟನೆಗೆ ಬೆಂಬಲ ನೀಡಿದ್ದ ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್‌ ಮತ್ತು ಆಗಿನ ವಿಪಕ್ಷ ನಾಯಕ ಸಿದ್ದರಾಮಯ್ಯ ನೌಕರರ ಬೇಡಿಕೆ ಬಗ್ಗೆ ಸಹಾನುಭೂತಿ ವ್ಯಕ್ತಪಡಿಸಿದ್ದರು. ಆದರೆ ಈಗಿನ ಸರ್ಕಾರ ಕೂಡ ಈ ಬಗ್ಗೆ ಚಿಂತನೆ ನಡೆಸಿಲ್ಲ.

ಸೋಮವಾರ ವಿಧಾನಸಭೆಯಲ್ಲಿ ಶಾಸಕ ಅಪ್ಪಾಜಿ ಸಿ.ಎಸ್‌. ನಾಡಗೌಡ ಕೇಳಿದ ಪ್ರಶ್ನೆಗೆ ಲಿಖಿತ ಉತ್ತರ ನೀಡಿದ ಸಚಿವ ರಾಮಲಿಂಗಾರೆಡ್ಡಿ, ಕೆಎಸ್‌ಆರ್‌ಟಿಸಿ ಮತ್ತು ಬಿಎಂಟಿಸಿ ನೌಕರರನ್ನು ಸರ್ಕಾರಿ ಸರ್ಕಾರಿ ನೌಕರರೆಂದು ಪರಿಗಣಿಸುವ ಪ್ರಸ್ತಾವನೆ ಸರ್ಕಾರದ ಮುಂದಿಲ್ಲ ಎಂದು ಸ್ಪಷ್ಟವಾಗಿ ತಿಳಿಸಿದ್ದಾರೆ.

ಈ ಸಾರಿಗೆ ನೌಕರರಿಗೆ ಸರಿಸಮಾನವಾದ ವೇತನ ಹಾಗು ಇತರೆ ಎಲ್ಲ ಸೌಲಭ್ಯಗಳನ್ನು ನೀಡಲು ಯಾವ ಕ್ರಮ ತೆಗೆದುಕೊಳ್ಳಲಾಗಿದೆ ಎಂದು ಕೇಳಲಾದ ಮತ್ತೊಂದು ಪ್ರಶ್ನೆಗೆ ವಿವರವಾಗಿ ಲಿಖಿತ ಉತ್ತರ ನೀಡಿರುವ ಸಚಿವರು, ರಾಜ್ಯ ರಸ್ತೆ ಸಾರಿಗೆ ನಿಗಮಗಳು ರಸ್ತೆ ಸಾರಿಗೆ ನಿಗಮಗಳ ಕಾಯ್ದೆ-1950ರಡಿ ಅಸ್ತಿತ್ವಕ್ಕೆ ಬಂದಿರುವ ಸರ್ಕಾರಿ ಸ್ವಾಮ್ಯದ ಸ್ವಾಯತ್ತ ಸಂಸ್ಥೆ ಆಗಿರುತ್ತದೆ. ರಸ್ತೆ ಸಾರಿಗೆ ನಿಗಮಗಳ ನಿರ್ವಹಣೆ ಮತ್ತು ಸಿಬ್ಬಂದಿಗಳ ವೇತನ ಹಾಗೂ ಎಲ್ಲಾ ಆರ್ಥಿಕ ಸೌಲಭ್ಯಗಳನ್ನು ನಿಗಮಗಳು ಆಂತರಿಕ. ಮೂಲಗಳಿಂದಲೇ ಭರಿಸಬೇಕಿದೆ. ಆದ್ದರಿಂದ, ರಾಜ್ಯ ಸರ್ಕಾರಿ ನೌಕರರ ವೇತನ ಶ್ರೇಣಿ ಮತ್ತು ವೇತನವನ್ನು ರಸ್ತೆ ಸಾರಿಗೆ ನಿಗಮಗಳ ನೌಕರರ ವೇತನ ಶ್ರೇಣಿ ಮತ್ತು ವೇತನಕ್ಕೆ ಹೋಲಿಸಲು ಬರುವುದಿಲ್ಲ ಎಂದಿದ್ದಾರೆ.

ಸರ್ಕಾರಿ ನೌಕರರಿಗೆ ಸಂಬಂಧಿಸಿದ ಸುದ್ದಿಗಳಿಗಾಗಿ ಇಲ್ಲಿ (Click Here) ಕ್ಲಿಕ್‌ ಮಾಡಿ.

ಸಚಿವರು ಹೇಳಿದ್ದೇನು?

ಸಾರಿಗೆ ಸಂಸ್ಥೆಗಳ ನೌಕರರು ದಿನಾಂಕ;31/12/2019 ರಂದು ಪಡೆಯುತ್ತಿದ್ದ ಮೂಲ ವೇತನವನ್ನು ಶೇ.15ರಷ್ಟು ಹೆಚ್ಚಿಸಿ ದಿನಾಂಕ: 01.03.2023ರಿಂದ ಜಾರಿಗೆ ಬರುವಂತೆ ವೇತನ ಪರಿಷ್ಕರಣೆ ಮಾಡಲಾಗಿದೆ. ಅಲ್ಲದೇ, ಸಾರಿಗೆ ಸಂಸ್ಥೆಗಳಲ್ಲಿ ಕರ್ತವ್ಯ ನಿರ್ವಹಿಸುತ್ತಿರುವ ನೌಕರರಿಗೆ, ವೇತನ ಬಡ್ಡಿಗಳನ್ನು ಮತ್ತು ಇತರೆ. ವೇತನ ಭತ್ಯೆಗಳಾದ ತುಟ್ಟಿ ಭತ್ಯೆ, ಮನೆ ಬಾಡಿಗೆ ಭತ್ಯೆ, ಪ್ರಭಾರ ಕಾರ್ಯ ಭತ್ಯೆ, ಅಧಿಕಾವಧಿ ಭತ್ಯೆ, ವಾಷಿಂಗ್‌ ಭತ್ಯೆ, ಬಾಟಾ, ಇನ್ಸೆಂಟಿವ್‌, ರಾತ್ರಿ ಭತ್ಯೆ, ಸಹ ವೇತನ ರಜೆ ಭತ್ಯೆ, ಪ್ರವಾಸ ಭತ್ಯೆ, ನಗರ ಪರಿಹಾರ ಭತ್ಯೆ, ಕನ್ವಿಯನ್ಸ್‌ ಭತ್ಯೆ, ಶಿಶುಪಾಲನಾ ಭತ್ಯೆ, ಬೆಳ್ಳಿ & ಬಂಗಾರ ಪದಕ ಭತ್ಯೆ, ವಾಹನ ಭತ್ಯೆ, ದಿನ ಪತ್ರಿಕೆ ಭತ್ಯೆ, ಪರಿಚಾರಕ ಭತ್ಯೆ, ಹಾರ್ಡ್‌ಶಿಪ್‌ ಭತ್ಯೆ, ಮುಂತಾದವುಗಳನ್ನು ಪಾವತಿಸಲಾಗುತ್ತಿದೆ ಎಂದು ಸಚಿವ ರಾಮಲಿಂಗರೆಡ್ಡಿ ವಿವರಿಸಿದ್ದಾರೆ.

ಇದನ್ನೂ ಓದಿ : 2000 Notes Withdrawn: ಕೆಎಸ್‌ಆರ್‌ಟಿಸಿ, ಬಿಎಂಟಿಸಿ ಬಸ್‌ನಲ್ಲಿ 2000 ನೋಟು ಚಲಾವಣೆಯಲ್ಲಿ ಇಲ್ವಾ?

ಅರ್ಹ ಸಿಬ್ಬಂದಿಗಳಿಗೆ ಮುಂಬಡ್ತಿ, ಆಯ್ಕೆ ಶ್ರೇಣಿ, ಉನ್ನತ ಶ್ರೇಣಿ, ಗಳಿಕೆ ರಜೆ ನಗದಿಕರಣ, ವಿಶೇಷ ವೇತನ ಬಡ್ತಿ, ವಿಶೇಷ ರಜೆಗಳು ಹಾಗೂ ಇತರೆ ಸೌಲಭ್ಯಗಳನ್ನು ನಿಯಮಾನುಸಾರ ಕಾಲಕಾಲಕ್ಕೆ ನೀಡಲಾಗುತ್ತಿದೆ ಎಂದು ಸಚಿವರು ತಮ್ಮ ಉತ್ತರದಲ್ಲಿ ತಿಳಿಸಿದ್ದಾರೆ.

ಕ್ಷಣ ಕ್ಷಣದ ಮಾಹಿತಿಗಾಗಿ Vistara News FaceBook ಪೇಜ್ ಫಾಲೋ ಮಾಡಿ
ಮಹತ್ವದ ಮಾಹಿತಿಗಾಗಿ ವಿಸ್ತಾರ ನ್ಯೂಸ್ ಆ್ಯಪ್ ಉಚಿತವಾಗಿ ಡೌನ್ ಲೋಡ್ ಮಾಡಿಕೊಳ್ಳಿ: Andriod App | IOS App
Continue Reading
1 Comment

1 Comment

  1. Manjunathhi

    12 July 2023, 7:16 AM at 7:16 am

    7th pe kamishana kodabeku

Leave a Reply

Your email address will not be published. Required fields are marked *

ಪ್ರಮುಖ ಸುದ್ದಿ

Reservation in Outsourcing: ಇನ್ನು ಹೊರಗುತ್ತಿಗೆ ನೇಮಕಾತಿಯಲ್ಲೂ ಮೀಸಲಾತಿ; ಸಿದ್ದರಾಮಯ್ಯ ಸರ್ಕಾರದ ಮಹತ್ವದ ಆದೇಶ

Reservation in Outsourcing: ಈ ಹಿಂದೆ ಡಿಸೆಂಬರ್‌ನಲ್ಲಿ ನಡೆದ ರಾಜ್ಯ ಸಚಿವ ಸಂಪುಟ ಸಭೆಯಲ್ಲಿ ಹೊರಗುತ್ತಿಗೆ ನೇಮಕಾತಿಯಲ್ಲೂ ಮೀಸಲಾತಿ ನೀಡಲು ಒಪ್ಪಿಗೆ ನೀಡಲಾಗಿತ್ತು. ಇದೀಗ ರಾಜ್ಯ ಸರ್ಕಾರದ ಹೊರಗುತ್ತಿಗೆ ನೇಮಕಾತಿಯಲ್ಲಿ ಮೀಸಲಾತಿ ಅಳವಡಿಸುವ ಬಗ್ಗೆ ಸಂಬಂಧಿಸಿ ಆದೇಶ ಹೊರಡಿಸಲಾಗಿದೆ.

VISTARANEWS.COM


on

Reservation in outsourcing
Koo

ಬೆಂಗಳೂರು: ಸರ್ಕಾರದ ವಿವಿಧ ಹುದ್ದೆಗಳಿಗೆ ಹೊರಗುತ್ತಿಗೆ ಆಧಾರದಲ್ಲಿ ನೇಮಕಾತಿ ಮಾಡಿಕೊಳ್ಳುವಾಗ ಮೀಸಲಾತಿ ಕಲ್ಪಿಸಲು ರಾಜ್ಯ ಸರ್ಕಾರ ಮಹತ್ವದ ಆದೇಶ ಹೊರಡಿಸಿದೆ. ಈ ಹಿಂದೆ ಡಿಸೆಂಬರ್‌ನಲ್ಲಿ ನಡೆದ ರಾಜ್ಯ ಸಚಿವ ಸಂಪುಟ ಸಭೆಯಲ್ಲಿ ಹೊರಗುತ್ತಿಗೆ ನೇಮಕಾತಿಯಲ್ಲೂ ಮೀಸಲಾತಿ (Reservation in Outsourcing) ಅಳವಡಿಸಲು ಒಪ್ಪಿಗೆ ನೀಡಲಾಗಿತ್ತು. ಇದೀಗ ಅಧಿಕೃತವಾಗಿ ರಾಜ್ಯ ಸರ್ಕಾರವು ಮೀಸಲಾತಿಗೆ ಸಂಬಂಧಿಸಿ ಆದೇಶ ಹೊರಡಿಸಿದೆ.

ರಾಜ್ಯ ಸರ್ಕಾರದ ಹೊರಗುತ್ತಿಗೆ ನೇಮಕಾತಿಯಲ್ಲಿ ಮೀಸಲಾತಿ ಅಳವಡಿಸುವ ಬಗ್ಗೆ ಸಿಬ್ಬಂದಿ ಮತ್ತು ಆಡಳಿತ ಸುಧಾರಣೆ ಇಲಾಖೆಯ ಸರ್ಕಾರದ ಕಾರ್ಯದರ್ಶಿ ರಂದೀಪ್‌. ಡಿ ಅವರು ಸುತ್ತೋಲೆ ಹೊರಡಿಸಿದ್ದಾರೆ.

ಸುತ್ತೋಲೆಯಲ್ಲಿ ಏನಿದೆ?

ರಾಜ್ಯ ಸರ್ಕಾರದ ಕಚೇರಿಗಳಲ್ಲಿನ ವಾಹನ ಚಾಲಕರು, ಡೇಟಾ ಎಂಟ್ರಿ ಆಪರೇಟರ್, ಸ್ವಚ್ಛತಾ ಸಿಬ್ಬಂದಿ, ಗ್ರೂಪ್-ಡಿ ಹುದ್ದೆಗಳನ್ನು ಹೊರಗುತ್ತಿಗೆ ಮೂಲಕ ಮಾಡಿಕೊಳ್ಳುವುದು ಸರ್ಕಾರದ ಇತ್ತೀಚಿನ ಅಂಗೀಕೃತ ಕಾರ್ಯನೀತಿಯಾಗಿದೆ. 2023ರ ಡಿಸೆಂಬರ್ 21ರಂದು ನಡೆದ ಸಚಿವ ಸಂಪುಟ ಸಭೆಯಲ್ಲಿ ಹೊರಗುತ್ತಿಗೆ ನೇಮಕಾತಿಯಲ್ಲಿ ಮೀಸಲಾತಿ ನೀತಿಯನ್ನು ಜಾರಿಗೊಳಿಸಲು ನಿರ್ಣಯಿಸಲಾಗಿತ್ತು. ಆದ್ದರಿಂದ, ರಾಜ್ಯ ಸರ್ಕಾರದ ವಿವಿಧ ಇಲಾಖೆಗಳಲ್ಲಿ ನಡೆಯುವ ಎಲ್ಲಾ ಹೊರಗುತ್ತಿಗೆ ನೇಮಕಾತಿಯಲ್ಲಿ ಪ್ರಸ್ತುತ ಜಾರಿಯಲ್ಲಿರುವ ಮೀಸಲಾತಿ ನಿಯಮವನ್ನು ಈ ಕೆಳಕಂಡ ಸೂಚನೆಗಳೊಂದಿಗೆ ಕಡ್ಡಾಯವಾಗಿ ಪಾಲಿಸುವಂತೆ ಸೂಚಿಸಲಾಗಿದೆ:

  1. ಹೊರಗುತ್ತಿಗೆ ಮೀಸಲಾತಿಯು ನೀತಿಯು 45 ದಿನಗಳಿಗಿಂತ ಕಡಿಮೆ ಅವಧಿಯ ನೇಮಕಾತಿಗಳಿಗೆ ಅನ್ವಯಿಸುವುದಿಲ್ಲ.
  2. ಪ್ರತಿ ವರ್ಷವು ಹೊರ ಸಂಪನ್ಮೂಲ ಏಜೆನ್ಸಿಗಳಿಂದ ಕೆ.ಟಿ.ಪಿ.ಪಿ ಅಧಿನಿಯಮ 1999 ರಂತೆ ಟೆಂಡರ್ ಕರೆಯುವಾಗ ಕಡ್ಡಾಯವಾಗಿ ಮೀಸಲಾತಿಯಂತೆ ಸಿಬ್ಬಂದಿಗಳನ್ನು ಪಡೆಯಲು ಷರತ್ತುಗಳನ್ನು ನಮೂದಿಸುವುದು.
  3. ಹೊರಗುತ್ತಿಗೆ ನೇಮಕಾತಿಯಲ್ಲಿ ಪರಿಶಿಷ್ಟ ಜಾತಿ / ಪರಿಶಿಷ್ಟ ಪಂಗಡ / ಹಿಂದುಳಿದ ವರ್ಗಗಳಿಗೆ ನಿಗದಿಪಡಿಸಿದ ಮೀಸಲಾತಿ ಪ್ರಮಾಣದಲ್ಲಿ ಕನಿಷ್ಠ ಶೇಕಡ 33 ರಷ್ಟು ಮಹಿಳೆಯರನ್ನು ನೇಮಕಾತಿ ಮಾಡಿಕೊಳ್ಳತಕ್ಕದ್ದು.
  4. ಟೆಂಡ‌ರ್ ಅಂಗೀಕರಿಸುವ ಪ್ರಾಧಿಕಾರವು ಕಡ್ಡಾಯವಾಗಿ ಹೊರ ಸಂಪನ್ಮೂಲ ಏಜೆನ್ಸಿಯು ಅಂತಿಮಗೊಳಿಸಿದ ಸಿಬ್ಬಂದಿಗಳ ಪಟ್ಟಿ ಮೀಸಲಾತಿಯಂತೆ ಇರುವ ಬಗ್ಗೆ ಖಚಿತಪಡಿಸಿಕೊಳ್ಳತಕ್ಕದ್ದು. ಜಾತಿ ಪ್ರಮಾಣ ಪತ್ರ ಮತ್ತು ಇತರೆ ದಾಖಲೆಗಳನ್ನು ಹೊರ ಸಂಪನ್ಮೂಲ ಏಜೆನ್ಸಿಯು ಪಡೆದು ನಿರ್ವಹಿಸತಕ್ಕದ್ದು. ಟೆಂಡರ್ ಅಂಗೀಕರಿಸುವ ಪ್ರಾಧಿಕಾರವು ಈ ಬಗ್ಗೆ ಪರಿಶೀಲಿಸಿ ಕಾರ್ಯಾದೇಶವನ್ನು ನೀಡಲು ಕ್ರಮವಹಿಸುವುದು. (ಸಿಂಧುತ್ವ ಪ್ರಮಾಣ ಪತ್ರದ ಅಗತ್ಯವಿರುವುದಿಲ್ಲ)
  5. ಒಂದು ವೇಳೆ ನೇಮಕಾತಿಗೊಂಡ ಅಭ್ಯರ್ಥಿಗಳು ಕರ್ತವ್ಯಕ್ಕೆ ಹಾಜರಾಗದೇ ಇದ್ದಲ್ಲಿ / ಅರ್ಧದಲ್ಲಿ ಬಿಟ್ಟಿದಲ್ಲಿ ಅಂತಹ ಖಾಲಿ ಉಳಿಯುವ ಸ್ಥಾನವನ್ನು ಭರ್ತಿ ಮಾಡಲು ಅದೇ ಪ್ರವರ್ಗದ ಅಭ್ಯರ್ಥಿಗಳನ್ನು ನೇಮಿಸಿಕೊಳ್ಳಲು ಅಭ್ಯರ್ಥಿಗಳನ್ನು ಒದಗಿಸುವ ಏಜೆನ್ಸಿಯು ಕ್ರಮ ಕೈಗೊಳ್ಳತಕ್ಕದ್ದು.
  6. ಯಾವುದೇ ಇಲಾಖೆಯಲ್ಲಿ ಕನಿಷ್ಠ 20 ಅಭ್ಯರ್ಥಿಗಳನ್ನು ಹೊರಗುತ್ತಿಗೆ ಆಧಾರದ ಮೇಲೆ ನೇಮಕ ಮಾಡುವ ಸಂದರ್ಭದಲ್ಲಿ ಮಾತ್ರ ಮೀಸಲಾತಿ ನೀತಿಯನ್ನು ಜಾರಿಗೊಳಿಸತಕ್ಕದ್ದು.
  7. ಹೊರಗುತ್ತಿಗೆ ಆಧಾರದ ಮೇಲೆ ನೇಮಕ ಮಾಡುವ ಅಭ್ಯರ್ಥಿಯ ಕನಿಷ್ಠ ವಯೋಮಿತಿ 18 ವರ್ಷ ಮತ್ತು ಗರಿಷ್ಠ ವಯೋಮಿತಿ 60 ವರ್ಷಗಳಾಗಿರತಕ್ಕದ್ದು.
  8. ಸಾಮಾಜಿಕ ನ್ಯಾಯ ಮತ್ತು ಸಮಾನ ಉದ್ಯೋಗಾವಕಾಶಗಳನ್ನು ಒದಗಿಸುವ ದೃಷ್ಟಿಯಿಂದ ಹೊರಗುತ್ತಿಗೆ ನೇಮಕಾತಿಯಲ್ಲಿ ಮೀಸಲಾತಿಯನ್ನು ಅಳವಡಿಸುತ್ತಿರುವುದರಿಂದ ಯಾವುದೇ ಕಾರಣಕ್ಕಾಗಿ ಹೊರಗುತ್ತಿಗೆ ನೌಕರರನ್ನು ಖಾಯಂ ಮಾಡಲು ಪರಿಗಣಿಸತಕ್ಕದ್ದಲ್ಲ.
  9. ಈ ಮೇಲಿನ ಸೂಚನೆಗಳು ಸರ್ಕಾರದ ಎಲ್ಲಾ ಇಲಾಖೆಗಳು / ಸ್ನಾಯತ್ತ ಸಂಸ್ಥೆಗಳು | ನಿಗಮಗಳು / ಮಂಡಳಿಗಳು / ವಿಶ್ವವಿದ್ಯಾನಿಲಯಗಳಿಗೂ ಅನ್ವಯಿಸುತ್ತದೆ.

ಇದನ್ನೂ ಓದಿ | Job alert: ಇಂಡಿಯಾ ಪೋಸ್ಟ್‌ ಪೇಮೆಂಟ್‌ ಬ್ಯಾಂಕ್‌ನಲ್ಲಿದೆ ಉದ್ಯೋಗಾವಕಾಶ; ಆನ್‌ಲೈನ್‌ ಮೂಲಕ ಇಂದೇ ಅಪ್ಲೈ ಮಾಡಿ

ಈ ಹಿಂದೆ ಹೊರಗುತ್ತಿಗೆ ಹುದ್ದೆಗಳಲ್ಲಿ ಮೀಸಲಾತಿ ಇರಲಿಲ್ಲ. ಆದರೆ, ಮೀಸಲಾತಿ ನೀಡಬೇಕು ಎಂದು ಪರಿಶಿಷ್ಟ ಜಾತಿ ಮತ್ತು ಪಂಗಡಗಳ ಸಂಘಟನೆಗಳು ಆಗ್ರಹಿಸಿದ್ದವು. ಇದೀಗ ರಾಜ್ಯ ಸರ್ಕಾರ ಬೇಡಿಕೆಗಳಿಗೆ ಸ್ಪಂದಿಸಿದೆ.

Continue Reading

ಕರ್ನಾಟಕ

SSLC 2024 Exam 2: ಎಸ್‌ಎಸ್‌ಎಲ್‌ಸಿ ಪರೀಕ್ಷೆ-1 ಫೇಲ್‌ ಆದ ವಿದ್ಯಾರ್ಥಿಗಳಿಗೆ ವಿಶೇಷ ಪರಿಹಾರ ಬೋಧನೆ ತರಗತಿ ಮುಂದೂಡಿಕೆ

SSLC 2024 Exam 2: ರಾಜ್ಯ ಸರ್ಕಾದ ಸೂಚನೆಗಳ ಅನ್ವಯ ಎಸ್‌ಎಸ್‌ಎಲ್‌ಸಿ ಪರೀಕ್ಷೆ – 1ರ ಅನುತ್ತೀರ್ಣ ವಿದ್ಯಾರ್ಥಿಗಳಿಗೆ ಮಾಡಲು ಉದ್ದೇಶಿಸಲಾಗಿದ್ದ ವಿಶೇಷ ಪರಿಹಾರ ಬೋಧನೆ ತರಗತಿ ಮುಂದೂಡಲಾಗಿದೆ. ಮೇ 29ರಿಂದ ಜೂ.6ರವರೆಗೆ ಈ ವಿಶೇಷ ತರಗತಿಗಳು ನಡೆಯಲಿವೆ. ಇನ್ನು ಜೂ. 14ರಿಂದ ಎಸ್ಎಸ್ಎಲ್‌ಸಿ ಪರೀಕ್ಷೆ-2 ಆರಂಭವಾಗಲಿದೆ. ಪರಿಷ್ಕೃತ ವೇಳಾಪಟ್ಟಿಯನ್ನು ಕರ್ನಾಟಕ ಶಾಲಾ ಪರೀಕ್ಷೆ ಮತ್ತು ಮೌಲ್ಯ ನಿರ್ಣಯ ಮಂಡಲಿ ಬಿಡುಗಡೆ ಮಾಡಲಿದೆ

VISTARANEWS.COM


on

SSLC Exam 2024
Koo

ಬೆಂಗಳೂರು: 2024ನೇ ಸಾಲಿನ ಎಸ್‌ಎಸ್‌ಎಲ್‌ಸಿ ಪರೀಕ್ಷೆ – 1ರಲ್ಲಿ (SSLC 2024 Exam 2) ಅನುತ್ತೀರ್ಣರಾದ ವಿದ್ಯಾರ್ಥಿಗಳಿಗೆ ವಿಶೇಷ ಪರಿಹಾರ ಬೋಧನೆ ತರಗತಿ ಮುಂದೂಡಿ ರಾಜ್ಯ ಶಿಕ್ಷಣ ಇಲಾಖೆಯಿಂದ ಆದೇಶ ಹೊರಡಿಸಿದೆ. ರಾಜ್ಯ ಸರ್ಕಾದ ಸೂಚನೆಗಳ ಅನ್ವಯ ಮುಂದೂಡಲಾಗಿದ್ದು, ಮೇ 29ರಿಂದ ಜೂ.6ರವರೆಗೆ ವಿಶೇಷ ಪರಿಹಾರ ಬೋಧನೆ ತರಗತಿಗಳು ನಡೆಯಲಿವೆ.

ಈ ಬಗ್ಗೆ ಶಾಲಾ ಶಿಕ್ಷಣ ಇಲಾಖೆಯ ಆಯುಕ್ತರ ಆದೇಶದ ಮೇರೆಗೆ ನಿರ್ದೇಶಕರು (ಪ್ರೌಢ ಶಿಕ್ಷಣ) ಆದೇಶ ಹೊರಡಿಸಿದೆ. ಎಸ್‌ಎಸ್‌ಎಲ್‌ಸಿ ಪರೀಕ್ಷೆ – 1ರಲ್ಲಿ ಅನುತ್ತೀರ್ಣರಾದ ವಿದ್ಯಾರ್ಥಿಗಳಿಗೆ ಈ ಹಿಂದೆ ಮೇ 15ರಿಂದ ಜೂನ್‌ 5ರವರೆಗೆ ವಿಶೇಷ ಪರಿಹಾರ ಬೋಧನೆ ತರಗತಿ ನಡೆಸಲು ಸುತ್ತೋಲೆ ಹೊರಡಿಸಲಾಗಿತ್ತು. ಆದರೆ, ಈಗ ಸರ್ಕಾರದ ಸೂಚನೆ ಮೇರೆಗೆ ವಿಶೇಷ ತರಗತಿಗಳನ್ನು ಮೇ 29ರಿಂದ ಜೂನ್‌ 13ವರೆಗೆ ನಡೆಸಲು ಆದೇಶ ನೀಡಲಾಗಿದೆ ಎಂದು ತಿಳಿಸಿದ್ದಾರೆ.

ಜೂ. 14ರಿಂದ ಎಸ್ಎಸ್ಎಲ್‌ಸಿ ಪರೀಕ್ಷೆ-2

ಎಸ್ಎಸ್ಎಲ್‌ಸಿ ಪರೀಕ್ಷೆ-2 ಜೂನ್ 14ರಿಂದ (Karnataka SSLC 2024 Exam 2) ಆರಂಭವಾಗಲಿದೆ. ಪರಿಷ್ಕೃತ ವೇಳಾಪಟ್ಟಿಯನ್ನು ಕರ್ನಾಟಕ ಶಾಲಾ ಪರೀಕ್ಷೆ ಮತ್ತು ಮೌಲ್ಯ ನಿರ್ಣಯ ಮಂಡಲಿ ಬಿಡುಗಡೆ ಮಾಡಲಿದೆ. ಈ ಹಿಂದೆ ಜೂನ್‌ 7ರಿಂದ 14ರವರೆಗೆ ಎಸ್ಎಸ್ಎಲ್‌ಸಿ ಪರೀಕ್ಷೆ-2 ನಿಗದಿಯಾಗಿತ್ತು. ಆದರೆ, ಪರೀಕ್ಷೆ ಮುಂದೂಡಿಕೆಯಾಗಿದ್ದು, ಜೂನ್‌ 14ರಿಂದ ಪರೀಕ್ಷೆ ಆರಂಭವಾಗಲಿದೆ ಎಂದು ಶಾಲಾ ಶಿಕ್ಷಣ ಇಲಾಖೆ ಮಾಹಿತಿ ನೀಡಿದೆ.

ಎಸ್‌ಎಸ್‌ಎಲ್‌ಸಿ 2, 3ನೇ ಪರೀಕ್ಷೆ ಬರೆಯುವವರಿಗೆ ಗುಡ್‌ ನ್ಯೂಸ್‌! ಇರಲಿದೆ ಸ್ಪೆಷಲ್‌ ಕ್ಲಾಸ್‌

SSLC Result 2024 SSLC 2nd and 3rd exam aspirants to have special classes

ಬೆಂಗಳೂರು: 2023-24ನೇ ಸಾಲಿನ ಎಸ್‌ಎಸ್‌ಎಲ್‌ಸಿ ಪರೀಕ್ಷೆ-1ರ (SSLC Result 2024) ಫಲಿತಾಂಶವನ್ನು ಗುರುವಾರ (ಮೇ 9) ಕರ್ನಾಟಕ ಶಾಲಾ ಪರೀಕ್ಷೆ ಮತ್ತು ಮೌಲ್ಯ ನಿರ್ಣಯ ಮಂಡಳಿ ಪ್ರಕಟಿಸಿದೆ. ಆದರೆ, ಕಳೆದ ವರ್ಷಕ್ಕೆ ಹೋಲಿಸಿದರೆ ಈ ವರ್ಷ ಫಲಿತಾಂಶ ಕುಸಿತ (SSLC Result 2024) ಕಂಡಿದೆ. ಅಲ್ಲದೆ, ಫಲಿತಾಂಶವನ್ನು ಸುಧಾರಣೆ ಮಾಡಿಕೊಳ್ಳುವವರು, ಅನುತ್ತೀರ್ಣ ಹೊಂದಿದವರ ಸಲುವಾಗಿ ವಿಶೇಷ ಬೋಧನೆ ವ್ಯವಸ್ಥೆಯನ್ನು ಮಾಡಲು ಶಿಕ್ಷಣ ಇಲಾಖೆ ಮುಂದಾಗಿದೆ.

ಅಂದರೆ ಈ ಬಾರಿ ನಿರೀಕ್ಷಿತ ಪ್ರಮಾಣದಲ್ಲಿ ಫಲಿತಾಂಶ ಬಂದಿಲ್ಲ. ಕೆಲವು ಕಟ್ಟುನಿಟ್ಟಿನ ಕ್ರಮದಿಂದಾಗಿ ಭಾರಿ ಇಳಿಕೆ ಕಂಡಿದೆ. ಈ ಹಿನ್ನೆಲೆಯಲ್ಲಿ ಶೇಕಡಾ 20ರಷ್ಟು ಗರೇಸ್‌ ಮಾರ್ಕ್ಸ್‌ ಅನ್ನು ಕೊಟ್ಟು ಪಾಸ್‌ ಮಾಡಲಾಗಿತ್ತು. ಮುಂದೆ ಬರುವ 2, 3ನೇ ಪರೀಕ್ಷೆಯಲ್ಲಿ ಹೆಚ್ಚಿನ ಅಂಕಗಳನ್ನು ವಿದ್ಯಾರ್ಥಿಗಳು ತೆಗೆದುಕೊಳ್ಳುವ ನಿಟ್ಟಿನಲ್ಲಿ ಶಿಕ್ಷಣ ಇಲಾಖೆಯು ಕ್ರಮವನ್ನು ತೆಗೆದುಕೊಂಡಿದೆ. ಅಂಥ ಮಕ್ಕಳಿಗೆ ಮುಂದಿನ ಒಂದು ತಿಂಗಳಲ್ಲಿ “ಪರಿಹಾರ ಬೋಧನೆ” ಮಾಡಲು ವ್ಯವಸ್ಥೆ ಮಾಡಲಾಗುತ್ತಿದೆ.

ಇದನ್ನೂ ಓದಿ | SSLC Grace Marks: ಯಾರನ್ನು ಕೇಳಿ ಶೇ. 20 ಗ್ರೇಸ್‌ ಮಾರ್ಕ್ಸ್‌ ಕೊಟ್ಟಿರಿ? ಶಿಕ್ಷಣ ಇಲಾಖೆ ವಿರುದ್ಧ ಹರಿಹಾಯ್ದ ಸಿದ್ದರಾಮಯ್ಯ!

ಈ ಬಗ್ಗೆ ಶಿಕ್ಷಣ ಇಲಾಖೆ ಪ್ರಕಟಣೆ ಹೊರಡಿಸಿದ್ದು, ಪರಿಹಾರ ಕ್ರಮವಾಗಿ ಶಿಕ್ಷಣ ಇಲಾಖೆಯು ಪರೀಕ್ಷೆ-1 ರಲ್ಲಿ ಉತ್ತಮ ಸಾಧನೆ ಮಾಡದ ಅಥವಾ ತಮ್ಮ ಅಂಕಗಳನ್ನು ಉತ್ತಮ ಪಡಿಸಿಕೊಳ್ಳಲು ಬಯಸುವ ಎಲ್ಲ ವಿದ್ಯಾರ್ಥಿಗಳಿಗೆ ಮುಂದಿನ ಒಂದು ತಿಂಗಳಲ್ಲಿ ಪರಿಹಾರ ಬೋಧನೆಯನ್ನು ಆಯೋಜಿಸುತ್ತದೆ. ಇದರಿಂದ ವಿದ್ಯಾರ್ಥಿಗಳು ಪರೀಕ್ಷೆ-2 ಮತ್ತು ಪರೀಕ್ಷೆ-3ಕ್ಕೆ ಉತ್ತಮವಾಗಿ ಸಿದ್ಧರಾಗಲು ಸಾಧ್ಯವಾಗುತ್ತದೆ ಎಂದು ಹೇಳಿದೆ.

Continue Reading

ಕರ್ನಾಟಕ

Pratibha Puraskar: ರಾಜ್ಯ ಸರ್ಕಾರಿ ನೌಕರರ ಮಕ್ಕಳಿಂದ ಪ್ರತಿಭಾ ಪುರಸ್ಕಾರಕ್ಕೆ ಅರ್ಜಿ ಆಹ್ವಾನ; ಮೇ 31 ಕೊನೆಯ ದಿನ

Pratibha Puraskar: 2024ನೇ ಸಾಲಿನ ಎಸ್‌ಎಸ್‌ಎಲ್‌ಸಿ ಮತ್ತು ದ್ವಿತೀಯ ಪಿಯುಸಿ ಪರೀಕ್ಷೆಯಲ್ಲಿ ಶೇ. 90 ಕ್ಕಿಂತ ಹೆಚ್ಚು ಅಂಕ ಪಡೆದ ರಾಜ್ಯ ಸರ್ಕಾರಿ ನೌಕರರ ಮಕ್ಕಳು ಆನ್‌ಲೈನ್‌ ಮೂಲಕ ಪ್ರತಿಭಾ ಪುರಸ್ಕಾರಕ್ಕೆ ಅರ್ಜಿ ಸಲ್ಲಿಸಬಹುದಾಗಿದೆ.

VISTARANEWS.COM


on

Pratibha Puraskar
Koo

ಬೆಂಗಳೂರು: ಕರ್ನಾಟಕ ರಾಜ್ಯ ಸರ್ಕಾರಿ ನೌಕರರ ಮಕ್ಕಳಿಂದ ಪ್ರತಿಭಾ ಪುರಸ್ಕಾರಕ್ಕೆ (Pratibha Puraskar) ಅರ್ಜಿ ಆಹ್ವಾನಿಸಲಾಗಿದೆ. ಅರ್ಜಿ ಸಲ್ಲಿಸಲು ಮೇ 31 ಕೊನೆಯ ದಿನವಾಗಿದ್ದು, 2024ನೇ ಸಾಲಿನ ಎಸ್‌ಎಸ್‌ಎಲ್‌ಸಿ ಮತ್ತು ದ್ವಿತೀಯ ಪಿಯುಸಿ ಪರೀಕ್ಷೆಯಲ್ಲಿ ಶೇ. 90 ಕ್ಕಿಂತ ಹೆಚ್ಚು ಅಂಕ ಪಡೆದ ರಾಜ್ಯ ಸರ್ಕಾರಿ ನೌಕರರ ಮಕ್ಕಳು ಆನ್‌ಲೈನ್‌ ಮೂಲಕ ಅರ್ಜಿ ಸಲ್ಲಿಸಬಹುದಾಗಿದೆ ಎಂದು ಕರ್ನಾಟಕ ರಾಜ್ಯ ಸರ್ಕಾರಿ ನೌಕರರ ಸಂಘ ತಿಳಿಸಿದೆ.

ಅರ್ಜಿ ಸಲ್ಲಿಸಲು ಗಮನಿಸಬೇಕಾದ ಅಂಶಗಳು

  • ವಿದ್ಯಾರ್ಥಿಯ ತಂದೆ, ತಾಯಿ ರಾಜ್ಯ ಸರ್ಕಾರದ ಯಾವುದಾದರೊಂದು ಇಲಾಖೆಯಲ್ಲಿ ಕಾಯಂ ನೌಕರರಾಗಿರಬೇಕು.
  • ರಾಜ್ಯ ಸರ್ಕಾರದ ನಿಗಮ, ಮಂಡಳಿ, ಪ್ರಾಧಿಕಾರ, ವಿಶ್ವವಿದ್ಯಾಲಯ, ಖಾಸಗಿ ಹಾಗೂ ಅನುದಾನಿತ ವಿದ್ಯಾ ಸಂಸ್ಥೆಗಳ ನೌಕರರ ಮಕ್ಕಳು ಅರ್ಜಿ ಸಲ್ಲಿಸುವಂತಿಲ್ಲ.
  • ವಿದ್ಯಾರ್ಥಿಯು 2024ನೇ ಸಾಲಿನ ಎಸ್‌ಎಸ್‌ಎಲ್‌ಸಿ, ದ್ವಿತೀಯ ಪಿಯುಸಿ ವಾರ್ಷಿಕ ಪರೀಕ್ಷೆಯ ಪ್ರಥಮ ಪ್ರಯತ್ನದಲ್ಲಿ ತೇರ್ಗಡೆಯಾಗಿರಬೇಕು.
  • ವಿದ್ಯಾರ್ಥಿ, ತಂದೆ-ತಾಯಿಯ ದೂರವಾಣಿ ಹಾಗೂ ಇ-ಮೇಲ್ ವಿಳಾಸವನ್ನು ಕಡ್ಡಾಯವಾಗಿ ನಮೂದಿಸುವುದು.
  • ವಿದ್ಯಾರ್ಥಿಯ ಪಾಸ್‌ಪೋರ್ಟ್ ಅಳತೆಯ ಭಾವಚಿತ್ರ, ಧೃಡಿಕೃತ ಅಂಕಪಟ್ಟಿ, ತಂದೆ, ತಾಯಿಯ ಇಲಾಖಾ ಗುರುತಿನ ಚೀಟಿ ಅಥವಾ ಸೇವಾ ಧೃಢೀಕರಣ ಪ್ರಮಾಣ ಪತ್ರ (KSGEA News Blogನಲ್ಲಿ ಸೇವಾ ದೃಢೀಕರಣ ಪತ್ರದ ಪಿಡಿಎಫ್‌ ಫೈಲ್‌ ಲಭ್ಯವಿದೆ) ಮತ್ತು ಪೋಷಕರ ಸಹಿ ಸೇರಿ ಅಗತ್ಯ ದಾಖಲೆಗಳನ್ನು ನಿಗದಿತ ನಮೂನೆಯಲ್ಲಿ 5 ಎಂ.ಬಿ. ಸೈಜ್ ಮೀರದಂತೆ ಅಪ್‌ಲೋಡ್ ಮಾಡುವುದು.
  • ಹೆಚ್ಚಿನ ಮಾಹಿತಿಗಾಗಿ ಬೆಳಿಗ್ಗೆ 10.30 ರಿಂದ ಸಂಜೆ 6.00ವರೆಗೆ ಸಂಪರ್ಕಿಸಿ: ಸುರೇಶ್ ಎನ್. ಕಛೇರಿ ವ್ಯವಸ್ಥಾಪಕರು, 080 22354784/83

ಪ್ರತಿಭಾ ಪುರಸ್ಕಾರಕ್ಕೆ ಅರ್ಜಿ ಸಲ್ಲಿಸಲು ಇಲ್ಲಿ ಕ್ಲಿಕ್‌ ಮಾಡಿ

ಈ ಕೆಳಗಿನ ಲಿಂಕ್ ಮುಖಾಂತರ ಅರ್ಜಿ ಸಲ್ಲಿಸಿ. (https://forms.gle/vRzQ4toZuE7N8c4G9 OR https://bit.ly/ksgea2024pp)

ಸೇವಾ ದೃಢೀಕರಣ ಪತ್ರದ ಪಿಡಿಎಫ್‌ ಫೈಲ್‌ ಇಲ್ಲಿದೆ

ಇದನ್ನೂ ಓದಿ | 7th Pay Commission: 7ನೇ ವೇತನ ಆಯೋಗ; ವರದಿ ಜಾರಿಯಾದ್ರೆ ರಾಜ್ಯ ಸರ್ಕಾರಿ ನೌಕರರ ವೇತನ ಎಷ್ಟು ಹೆಚ್ಚಲಿದೆ?

Continue Reading

ಕರ್ನಾಟಕ

MLC Election: ಪರಿಷತ್‌ ಚುನಾವಣೆಗೂ ಮುನ್ನ ಒಪಿಎಸ್‌ ಮರು ಜಾರಿಗೆ ಮುಂದಾಯ್ತಾ ಕಾಂಗ್ರೆಸ್‌ ಸರ್ಕಾರ?

MLC Election: ವಿಧಾನ ಸಭಾ ಚುನಾವಣೆ ಸಮಯದಲ್ಲಿ ಒಪಿಎಸ್‌ ಜಾರಿ ಮಾಡುವ ಭರವಸೆಯನ್ನು ಚುನಾವಣಾ ಪ್ರಣಾಳಿಕೆಯಲ್ಲಿ ಕಾಂಗ್ರೆಸ್‌ ನೀಡಿತ್ತು. ಇದೀಗ ವಿಧಾನ ಪರಿಷತ್‌ ಚುನಾವಣೆ ಹಿನ್ನೆಲೆಯಲ್ಲಿ ಒಪಿಎಸ್ ಜಾರಿ ಮಾಡಲು ಚಿಂತನೆ ಮಾಡುತ್ತಿದೆ ಎನ್ನಲಾಗಿದೆ. ಮತ್ತೊಂದೆಡೆ ಕಾಂಗ್ರೆಸ್‌ ನಾಯಕರು ಕೂಡ ಹಳೆಯ ಪಿಂಚಣಿ ಯೋಜನೆ ಮರು ಜಾರಿ ಮಾಡಲು ಸಿಎಂ ಹಾಗೂ ಡಿಸಿಎಂಗೆ ಮನವಿ ಮಾಡುತ್ತಿದ್ದಾರೆ.

VISTARANEWS.COM


on

Koo

ಬೆಂಗಳೂರು: ವಿಧಾನ ಪರಿಷತ್‌ ಚುನಾವಣೆಗೆ (MLC Election) ಬಿಜೆಪಿ ಅಭ್ಯರ್ಥಿಗಳನ್ನು ಘೋಷಿಸಿದ ಬೆನ್ನಲ್ಲೇ ಕಾಂಗ್ರೆಸ್‌ ಕೂಡ ತನ್ನ ಅಭ್ಯರ್ಥಿಗಳ ಪಟ್ಟಿಯನ್ನು ಬಿಡುಗಡೆ ಮಾಡಿದೆ. ಮೂರು ಶಿಕ್ಷಕರ ಕ್ಷೇತ್ರ ಮತ್ತು ಮೂರು ಪದವೀಧರ ಕ್ಷೇತ್ರಗಳಿಗೆ ಕಾಂಗ್ರೆಸ್‌ ಅಭ್ಯರ್ಥಿಗಳನ್ನು ಘೋಷಿಸಿದ್ದು, ಚುನಾವಣೆಯಲ್ಲಿ (Legislative Council Elections) ಆರೂ ಸ್ಥಾನಗಳನ್ನೂ ಗೆಲ್ಲಲು ಮಾಸ್ಟರ್‌ ಪ್ಲ್ಯಾನ್‌ ರೂಪಿಸುತ್ತಿದೆ. ಈ ನಡುವೆ ಮತದಾರರನ್ನು ಸೆಳೆಯಲು ರಾಜ್ಯ ಸರ್ಕಾರಿ ನೌಕರರ ಬಹುಕಾಲದ ಬೇಡಿಕೆಯಾದ ಹಳೆಯ ಪಿಂಚಣಿ ಯೋಜನೆ (ಒಪಿಎಸ್‌) ಜಾರಿ ಮಾಡಲು ಕಾಂಗ್ರೆಸ್‌ ಸರ್ಕಾರ ಮುಂದಾಗಿದೆ ಎನ್ನಲಾಗಿದೆ.

ವಿಧಾನ ಸಭಾ ಚುನಾವಣೆ ಸಮಯದಲ್ಲಿ ಒಪಿಎಸ್‌ ಜಾರಿ ಮಾಡುವ ಭರವಸೆಯನ್ನು ಚುನಾವಣಾ ಪ್ರಣಾಳಿಕೆಯಲ್ಲಿ ಕಾಂಗ್ರೆಸ್‌ ನೀಡಿತ್ತು. ಇದೀಗ ಕೆಪಿಸಿಸಿ ಕಚೇರಿಯಲ್ಲಿ ಭಾನುವಾರ ನಡೆದ ಪೂರ್ವ ಭಾವಿ ಸಭೆಯಲ್ಲೂ ಒಪಿಎಸ್ (Old Pension Scheme) ಜಾರಿ ಬಗ್ಗೆ ಚರ್ಚೆಯಾಗಿರುವುದು ಕಂಡುಬಂದಿದೆ.

ಸಿಎಂ ಸಿದ್ದರಾಮಯ್ಯ, ಡಿಸಿಎಂ ಡಿ.ಕೆ.ಶಿವಕುಮಾರ್‌ ಅವರ ಸಮ್ಮುಖದಲ್ಲಿ ನಡೆದ ಸಭೆಯಲ್ಲಿ ಪರಿಷತ್‌ ಚುನಾವಣೆಯ ಕಾಂಗ್ರೆಸ್ ಅಭ್ಯರ್ಥಿಗಳಾದ ಆಯನೂರು ಮಂಜುನಾಥ್, ಕೆ.ಕೆ. ಮಂಜುನಾಥ್, ಚಂದ್ರಶೇಖರ ಪಾಟೀಲ್, ಶ್ರೀನಿವಾಸ ಹಾಗೂ ರಾಮೋಜಿ,‌ ಮರಿತ್ತಿಬ್ಬೇಗೌಡ ಭಾಗಿಯಾಗಿದ್ದರು. ಈ ವೇಳೆ ಕೆ.ಎಚ್. ಮುನಿಯಪ್ಪ, ಕೆಪಿಸಿಸಿ ಕಾರ್ಯಾಧ್ಯಕ್ಷರಾದ ಜಿ.ಸಿ. ಚಂದ್ರಶೇಖರ, ತನ್ವೀರ್ ಸೇಠ್, ವಸಂತ ಕುಮಾರ್ ಮತ್ತಿತರರು ಉಪಸ್ಥಿತರಿದ್ದರು.

ಇದನ್ನೂ ಓದಿ | 7th Pay Commission: 7ನೇ ವೇತನ ಆಯೋಗ; ವರದಿ ಜಾರಿಯಾದ್ರೆ ರಾಜ್ಯ ಸರ್ಕಾರಿ ನೌಕರರ ವೇತನ ಎಷ್ಟು ಹೆಚ್ಚಲಿದೆ?

ಒಪಿಎಸ್ ಮರು ಜಾರಿ ಮಾಡಿದ್ರೆ ಗೆಲುವು ಖಚಿತ

ರಾಜ್ಯದಲ್ಲಿ ಒಪಿಎಸ್ ಮರು ಜಾರಿ ಮಾಡುತ್ತೇವೆ ಎಂದು ಭರವಸೆ ನೀಡಿದರೆ ಗೆಲುವು ಖಚಿತ. ಹೀಗಾಗಿ ಒಪಿಎಸ್ ಬಗ್ಗೆ ಸರ್ಕಾರದ ನಿಲುವಿನ ಬಗ್ಗೆ ನೌಕರರಿಗೆ ಮನವರಿಕೆ ಮಾಡಿಕೊಡಿ ಎಂದು ಸಿಎಂ ಬಳಿ ಆಯನೂರು ಮಂಜುನಾಥ್ ಸೇರಿ ಕೈ ಅಭ್ಯರ್ಥಿಗಳು ಸಭೆಯಲ್ಲಿ ಮನವಿ ಮಾಡಿದ್ದಾರೆ. ಹೀಗಾಗಿ ನೌಕರರ ಮತದಾರರನ್ನು ಸೆಳೆಯಲು ಒಪಿಎಸ್‌ ಜಾರಿ ಮಾಡಲು ರಾಜ್ಯ ಸರ್ಕಾರ ಚಿಂತನೆ ನಡೆಸುತ್ತಿದೆ ಎನ್ನಲಾಗಿದೆ.

ಲೋಕಸಭಾ ಚುನಾವಣೆ‌ ಬಳಿಕ ವಿಧಾನ ಪರಿಷತ್ ಚುನಾವಣೆಗೆ ಕಾಂಗ್ರೆಸ್‌ ಸಜ್ಜಾಗಿದ್ದು, 6 ವಿಧಾನ ಪರಿಷತ್ ಕ್ಷೇತ್ರಗಳಿಗೆ ಅಭ್ಯರ್ಥಿಗಳನ್ನು ಘೋಷಣೆ ಮಾಡಿದೆ.

ಕೈ ಅಭ್ಯರ್ಥಿಗಳ ಪಟ್ಟಿ

  1. ನೈಋತ್ಯ ಶಿಕ್ಷಕರ ಕ್ಷೇತ್ರ – ಕೆ.ಕೆ. ಮಂಜುನಾಥ್
  2. ದಕ್ಷಿಣ ಶಿಕ್ಷಕರ ಕ್ಷೇತ್ರ – ಮರತಿಬ್ಬೇಗೌಡ
  3. ಆಗ್ನೇಯ ಶಿಕ್ಷಕರ ಕ್ಷೇತ್ರ – ಡಿ.ಟಿ.ಶ್ರೀನಿವಾಸ್
  4. ಈಶಾನ್ಯ ಪದವೀಧರ ಕ್ಷೇತ್ರ – ಡಾ.ಚಂದ್ರಶೇಖರ ಪಾಟೀಲ
  5. ನೈಋತ್ಯ ಪದವೀಧರ ಕ್ಷೇತ್ರ – ಆಯನೂರು ಮಂಜುನಾಥ್
  6. ಬೆಂಗಳೂರು ಪದವೀಧರ ಕ್ಷೇತ್ರ – ರಾಮೋಜಿ

ಪದವೀಧರ, ಶಿಕ್ಷಕರ ಕ್ಷೇತ್ರ ಚುನಾವಣೆ ವೇಳಾಪಟ್ಟಿ

ನಾಮಪತ್ರ ಸಲ್ಲಿಕೆಗೆ ಕೊನೇ ದಿನಾಂಕ: ಮೇ 16, 2024
ನಾಮಪತ್ರ ಪರಿಶೀಲನೆ: ಮೇ 17, 2024
ನಾಮಪತ್ರ ಹಿಂಪಡೆಯಲು ಕೊನೇ ದಿನಾಂಕ: ಮೇ 20, 2024
ಮತದಾನ: ಜೂನ್‌ 03, 2024
ಫಲಿತಾಂಶ: ಜೂನ್‌ 06, 2024

Continue Reading
Advertisement
LPL 2024
ಪ್ರಮುಖ ಸುದ್ದಿ4 mins ago

LPL 2024 : ಫ್ರಾಂಚೈಸಿ ಮಾಲೀಕನಿಂದಲೇ ಮ್ಯಾಚ್​ ಫಿಕ್ಸಿಂಗ್; ಬಂಧನ

CM's Bengaluru City Rounds
ಪ್ರಮುಖ ಸುದ್ದಿ24 mins ago

CM’s Bengaluru City Rounds: ರಸ್ತೆಗಳ ದುರಸ್ತಿಗೆ ಶಾಶ್ವತ ನಿರ್ವಹಣಾ ವ್ಯವಸ್ಥೆ ರೂಪಿಸಲು ಸಿಎಂ ಸೂಚನೆ

Back button saree blouse
ಫ್ಯಾಷನ್24 mins ago

Back Button Saree Blouse: ಮತ್ತೆ ಬಂದಿದೆ ರೆಟ್ರೊ ಸ್ಟೈಲ್‌ ಬ್ಯಾಕ್‌ ಬಟನ್‌ ಸೀರೆ ಬ್ಲೌಸ್‌!

Calcutta High Court
ಪ್ರಮುಖ ಸುದ್ದಿ37 mins ago

Other Backward Classes: 2011ರ ನಂತರ ನೀಡಿದ್ದ ಒಬಿಸಿ ಪ್ರಮಾಣಪತ್ರಗಳನ್ನು ರದ್ದು ಮಾಡಿದ ಕೋಲ್ಕೊತಾ ಹೈಕೋರ್ಟ್​​

Bomb Threat
ಪ್ರಮುಖ ಸುದ್ದಿ56 mins ago

Bomb Threat : ಗೃಹ ಸಚಿವಾಲಯಕ್ಕೆ ಬಾಂಬ್ ಬೆದರಿಕೆ; ದೆಹಲಿಯಲ್ಲಿ ಆತಂಕ

ಕರ್ನಾಟಕ1 hour ago

CM’s Bengaluru City Rounds: ರಾಜಕಾಲುವೆ ಒತ್ತುವರಿ ಯಾರೇ ಮಾಡಿದ್ರೂ ಮುಲಾಜಿಲ್ಲದೆ ತೆರವು: ಸಿಎಂ ಎಚ್ಚರಿಕೆ

IPL 2024
ಕ್ರಿಕೆಟ್1 hour ago

IPL 2024 : ಅಮ್ಮನನ್ನು ಆಸ್ಪತ್ರೆಯಲ್ಲಿ ಮಲಗಿಸಿ ಕೆಕೆಆರ್​ ಪರ ಕ್ವಾಲಿಫೈಯರ್ ಆಡಿದ ಆಫ್ಘನ್​ ಕ್ರಿಕೆಟಿಗ

Star Cricket Theam Fashion
ಫ್ಯಾಷನ್1 hour ago

Star Cricket Theme Fashion: ಕ್ರಿಕೆಟ್‌ ಥೀಮ್‌ನಲ್ಲಿ ಬೆರಗುಗೊಳಿಸಿದ ನಟಿ ಜಾಹ್ನವಿ ಕಪೂರ್ ಫ್ಯಾಷನ್‌!

Harish Poonja Govt responsible for disaster if MLA Harish Poonja is arrested says BY Vijayendra
ರಾಜಕೀಯ1 hour ago

Harish Poonja: ಶಾಸಕ ಹರೀಶ್‌ ಪೂಂಜಾರನ್ನು ಬಂಧಿಸಿದರೆ ಮುಂದಾಗುವ ಅನಾಹುತಕ್ಕೆ ಸರ್ಕಾರವೇ ಹೊಣೆ: ಗುಡುಗಿದ ವಿಜಯೇಂದ್ರ

Virat kohli
ಕ್ರೀಡೆ2 hours ago

IPL 2024 : ಕೊಹ್ಲಿಯನ್ನು ಹೊಗಳಿ ಆರ್​​ಸಿಬಿಗೆ ವಿದಾಯ ಹೇಳಿದ ವಿಜಯ್​ ಮಲ್ಯ

Sharmitha Gowda in bikini
ಕಿರುತೆರೆ8 months ago

Geetha Serial Kannada: ನಿದ್ದೆ ಕದ್ದ ಚೋರಿ! ನಟಿ `ಭಾನುಮತಿ’ ಹಾಟ್‌ ಪೋಟೊಗಳಿಗೆ ಫ್ಯಾನ್ಸ್ ಫುಲ್ ಫಿದಾ

Kannada Serials
ಕಿರುತೆರೆ7 months ago

Kannada Serials TRP: 2ನೇ ಸ್ಥಾನದಲ್ಲಿ 2 ಧಾರಾವಾಹಿಗಳು; ಟಿಆರ್‌ಪಿ ರೇಸ್‌ನಲ್ಲಿಲ್ಲ ಭಾಗ್ಯಲಕ್ಷ್ಮೀ!

Bigg Boss- Saregamapa 20 average TRP
ಕಿರುತೆರೆ7 months ago

Kannada Serials TRP: ಏಳನೇ ಸ್ಥಾನಕ್ಕೆ ʻಅಮೃತಧಾರೆʼ ಕುಸಿತ; ಬಿಗ್‌ ಬಾಸ್‌-ಸರಿಗಮಪ ಟಿಆರ್‌ಪಿ ಎಷ್ಟು?

galipata neetu
ಕಿರುತೆರೆ6 months ago

Kanyadana Serial: ಕಿರುತೆರೆಗೆ ಮತ್ತೆ ಎಂಟ್ರಿ ಕೊಟ್ಟ ʻಗಾಳಿಪಟʼ ಖ್ಯಾತಿಯ ʻನೀತುʼ!

Kannada Serials
ಕಿರುತೆರೆ8 months ago

Kannada Serials TRP: ನಾಲ್ಕನೇ ಸ್ಥಾನಕ್ಕೆ ಕುಸಿತ ಕಂಡ ʻಸೀತಾ ರಾಮʼ; ಟಿಆರ್‌ಪಿ ರೇಸ್‌ಗೆ ʻಭಾಗ್ಯಲಕ್ಷ್ಮಿʼ ಬ್ಯಾಕ್‌!

Kannada Serials
ಕಿರುತೆರೆ8 months ago

Kannada Serials TRP: ಟಿಆರ್‌ಪಿಯಲ್ಲಿ ʻಭಾಗ್ಯಲಕ್ಷ್ಮೀʼ ಹವಾ; ʻಪುಟ್ಟಕ್ಕನ ಮಕ್ಕಳುʼ ಧಾರಾವಾಹಿಗೆ ಸಂಕಷ್ಟ!

Bigg Boss' dominates TRP; Sita Rama fell to the sixth position
ಕಿರುತೆರೆ7 months ago

Kannada Serials TRP: ಟಿಆರ್‌ಪಿಯಲ್ಲಿ ʻಬಿಗ್ ಬಾಸ್ʼದೇ ಮೇಲುಗೈ; 6ನೇ ಸ್ಥಾನಕ್ಕೆ ಕುಸಿದ ʻಸೀತಾ ರಾಮʼ

geetha serial Dhanush gowda engagement
ಕಿರುತೆರೆ5 months ago

Dhanush Gowda: ಗೀತಾ ಧಾರಾವಾಹಿ ನಟನ ನಿಶ್ಚಿತಾರ್ಥ; ಭವ್ಯಾಳ ಕಮೆಂಟ್‌ ಬಾಕ್ಸ್‌ ಆಫ್‌!

varun
ಕಿರುತೆರೆ6 months ago

Brindavana Serial: ʼಬೃಂದಾವನʼ ಧಾರಾವಾಹಿಯಲ್ಲಿ ದೊಡ್ಡ ಟ್ವಿಸ್ಟ್‌; ಪ್ರಮುಖ ಪಾತ್ರಧಾರಿಯೇ ಬದಲು

Kannada Serials
ಕಿರುತೆರೆ8 months ago

Kannada Serials TRP: ಟಿಆರ್‌ಪಿಯಲ್ಲಿ ಏರಿಕೆ ಕಂಡ ʻಅಮೃತಧಾರೆʼ; ʻಗಟ್ಟಿಮೇಳʼಕ್ಕೆ ನಾಲ್ಕನೇ ಸ್ಥಾನ!

Karnataka Weather Forecast
ಮಳೆ12 hours ago

Karnataka Weather : ಮುಂದುವರಿಯಲಿದೆ ವರುಣಾರ್ಭಟ; ಬೆಂಗಳೂರಲ್ಲೂ ಭಾರಿ ಮಳೆ ನಿರೀಕ್ಷೆ!

Karnataka Rain
ಮಳೆ1 day ago

Karnataka Rain : ಭಾರಿ ಮಳೆಗೆ ಕರೆಂಟ್‌ ಕಟ್‌, ಕತ್ತಲಲ್ಲೇ ರೋಗಿಗಳಿಗೆ ಟ್ರೀಟ್‌ಮೆಂಟ್‌; ಮರ ಬಿದ್ದರೂ ಪಾರಾದ ತಾಯಿ-ಮಗ

Love Case Father throws hot water on man who loved his daughter for coming home
ಕೊಡಗು1 day ago

Love Case : ಮನೆಗೆ ಬಂದ ಪ್ರೇಮಿಗೆ ಕೊತ ಕೊತ ಕುದಿಯುವ ನೀರು ಎರಚಿದ ಯುವತಿ ತಂದೆ!

Contaminated Water
ಮೈಸೂರು1 day ago

Contaminated Water : ಡಿ ಸಾಲುಂಡಿಯಲ್ಲಿ ಕಲುಷಿತ ನೀರು ಸೇವಿಸಿ ಅಸ್ವಸ್ಥಗೊಂಡಿದ್ದ ಯುವಕ ಸಾವು

Karnataka Rain
ಮಳೆ2 days ago

Karnataka Rain : ಬಂಗಾಳ ಕೊಲ್ಲಿಯಲ್ಲಿ ವಾಯುಭಾರ ಕುಸಿತ; ಸಮುದ್ರಕ್ಕಿಳಿಯದಂತೆ ಮೀನುಗಾರರಿಗೆ ಎಚ್ಚರಿಕೆ

Karnataka Rain
ಮಳೆ3 days ago

Karnataka Rain : ಒಂದೇ ಮಳೆಗೆ ಹೊಳೆಯಂತಾದ ಬೆಂಗಳೂರು ರಸ್ತೆಗಳು! ಕಳಸದಲ್ಲೂ ಮುಂದುವರಿದ ಅಬ್ಬರ

Karnataka rain
ಮಳೆ3 days ago

Karnataka Rain : ವಿಜಯನಗರದಲ್ಲಿ ಸಿಡಿಲಿಗೆ ಜಾನುವಾರು ಬಲಿ; ಬೆಂಗಳೂರು ಸೇರಿ ಹಲವೆಡೆ ಭಾರಿ ಮಳೆ

Karnataka Rain
ಮಳೆ3 days ago

Karnataka Rain: ಧಾರಾಕಾರ ಮಳೆಗೆ ಕಾಂಪೌಂಡ್ ಕುಸಿದು 4 ಬೈಕ್‌ಗಳು ಜಖಂ; ಮದುವೆ ಮಂಟಪಕ್ಕೆ ನುಗ್ಗಿದ ನೀರು‌

Prajwal Revanna Case JDS calls CD Shivakumar pen drive gang
ರಾಜಕೀಯ5 days ago

Prajwal Revanna Case: CD ಶಿವಕುಮಾರ್ ಪೆನ್ ಡ್ರೈವ್ ಗ್ಯಾಂಗ್ ಎಂದ ಕುಟುಕಿದ ಜೆಡಿಎಸ್‌!

Karnataka weather Forecast
ಮಳೆ6 days ago

Karnataka Weather : ಮೈಸೂರು, ಮಂಡ್ಯ ಸೇರಿ ಈ 7 ಜಿಲ್ಲೆಗಳಲ್ಲಿ ವ್ಯಾಪಕ ಮಳೆ ಸಂಭವ

ಟ್ರೆಂಡಿಂಗ್‌