Govt Employees News cashless med cover for karnataka govt staff shortlyGovt Employees News : ಸರ್ಕಾರಿ ನೌಕರರಿಗೆ ಸದ್ಯವೇ ಕ್ಯಾಶ್‌ಲೆಸ್‌ ಇನ್ಷೂರೆನ್ಸ್‌ ಕಾರ್ಡ್‌ - Vistara News

ನೌಕರರ ಕಾರ್ನರ್

Govt Employees News : ಸರ್ಕಾರಿ ನೌಕರರಿಗೆ ಸದ್ಯವೇ ಕ್ಯಾಶ್‌ಲೆಸ್‌ ಇನ್ಷೂರೆನ್ಸ್‌ ಕಾರ್ಡ್‌

Govt Employees News : ರಾಜ್ಯ ಸರ್ಕಾರಿ ನೌಕರರಿಗೆ ನಗದು ರಹಿತ ವೈದ್ಯಕೀಯ ಚಿಕಿತ್ಸೆಯನ್ನು ಒದಗಿಸಲು ಜಾರಿಗೆ ತಂದಿರುವ ಕರ್ನಾಟಕ ಆರೋಗ್ಯ ಸಂಜೀವಿನಿ ಯೋಜನೆಯ (karnataka arogya sanjeevani ) ಕಾರ್ಡ್‌ ರೂಪಿಸಲು ಈಗ ಮಾಹಿತಿ ಸಂಗ್ರಹಿಸಲಾಗುತ್ತಿದೆ.

VISTARANEWS.COM


on

arogya sanjeevani scheme karnataka
ಮಹತ್ವದ, ಕುತೂಹಲಕರ ಸುದ್ದಿಗಾಗಿ ಫಾಲೊ ಮಾಡಿ
Koo

ಬೆಂಗಳೂರು: ರಾಜ್ಯ ಸರ್ಕಾರಿ ನೌಕರರಿಗೆ ಹಾಗೂ ಅವರ ಅವಲಂಬಿತ ಕುಟುಂಬದ ಸದಸ್ಯರಿಗೆ ನಗದು ರಹಿತ ವೈದ್ಯಕೀಯ ಚಿಕಿತ್ಸೆಯನ್ನು ಒದಗಿಸಲು ರಾಜ್ಯ ಸರ್ಕಾರ ಜಾರಿಗೆ ತಂದಿರುವ ʻಕರ್ನಾಟಕ ಆರೋಗ್ಯ ಸಂಜೀವಿನಿ ಯೋಜನೆʼಯ (ಕೆಎಎಸ್‌ಎಸ್‌) (karnataka arogya sanjeevani) ಲಾಭ ಸದ್ಯವೇ ನೌಕರರಿಗೆ (Govt Employees News) ಲಭ್ಯವಾಗಲಿದೆ.

ಈ ಯೋಜನೆಯ ಲಾಭ ಪಡೆಯಲು ಸರ್ಕಾರಿ ನೌಕರರು ʻಮಾನವ ಸಂಪನ್ಮೂಲ ನಿರ್ವಹಣಾ ವ್ಯವಸ್ಥೆಯʼ (HRMS) ವೆಬ್‌ಸೈಟ್‌ನಲ್ಲಿ ಮಾಹಿತಿಯನ್ನು ಅಪ್‌ಡೇಟ್‌ ಮಾಡಿಸಬೇಕೆಂದು ಎಲ್ಲ ಸರ್ಕಾರಿ ನೌಕರರಿಗೆ ಸರ್ಕಾರ ಸೂಚಿಸಿದೆ. ನೌಕರರು ತಮ್ಮ ಮತ್ತು ಅವಲಂಬಿತರ ಮಾಹಿತಿಯನ್ನು HRMS ನಲ್ಲಿ ಅಪಡೇಟ್ ಮಾಡಬೇಕಿರುತ್ತದೆ. ಅಲ್ಲದೆ ಈ ಮಾಹಿತಿಯನ್ನು ಕಚೇರಿಗೆ ಸಹ ಸಲ್ಲಿಸಬೇಸಬೇಕಿರುತ್ತದೆ ಎಂದು ನೌಕರರಿಗೆ ತಿಳಿಸಲಾಗಿದೆ.

ಎಚ್‌ಆರ್‌ಎಂಎಸ್‌ ವೆಬ್‌ಸೈಟ್‌ಗೆ ಭೇಟಿ ನೀಡಲು ಇಲ್ಲಿ ಕ್ಲಿಕ್‌ (Click Here) ಮಾಡಿ.

c s shadakshari
ಸಿ. ಎಸ್‌. ಷಡಾಕ್ಷರಿ

ಕಳೆದ ಮಾರ್ಚ್‌ನಲ್ಲಿ ಸರ್ಕಾರ ಈ ಯೋಜನೆಯ ಜಾರಿಗೆ ಸಂಬಂಧಿಸಿದಂತೆ ಪರಿಷ್ಕೃತ ಕಾರ್ಯನೀತಿಯನ್ನು ಪ್ರಕಟಿಸಿಸಿ ಯೋಜನೆಗೆ ಚಾಲನೆ ನೀಡಲಾಗಿತ್ತು. ಆದರೆ ಸಾಫ್ಟ್‌ವೇರ್‌ ಸಮಸ್ಯೆಯಿಂದಾಗಿ ಯೋಜನೆ ಜಾರಿ ಸಾಧ್ಯವಾಗಿರಲಿಲ್ಲ. ಈಗ ಸಮಸ್ಯೆ ಬಗೆಹರಿದಿದ್ದು, ತ್ವರಿತಗತಿಯಲ್ಲಿ ಮಾಹಿತಿ ಸಂಗ್ರಹಿಸಲಾಗುತ್ತಿದೆ. ಆದಷ್ಟು ಬೇಗ ಈ ಯೋಜನೆಯ ಲಾಭ ಪ್ರತಿ ನೌಕರರಿಗೂ ದೊರೆಯಲಿದೆ ಎಂದು ಸರ್ಕಾರಿ ನೌಕರರ ಸಂಘದ ಅಧ್ಯಕ್ಷ ಸಿ. ಎಸ್‌. ಷಡಾಕ್ಷರಿ ʻವಿಸ್ತಾರ ನ್ಯೂಸ್‌ʼಗೆ ತಿಳಿಸಿದ್ದಾರೆ.

ಸಂಘದ ಮನವಿಗೆ ಸ್ಪಂದಿಸಿರುವ ಸರ್ಕಾರ ಈ ನಿಟ್ಟಿನಲ್ಲಿ ತುರ್ತು ಕ್ರಮ ತೆಗೆದುಕೊಂಡಿದೆ. ನೌಕರರ ಮಾಹಿತಿ ಸಂಗ್ರಹ ಸಂಪೂರ್ಣವಾಗುತ್ತಿದ್ದಂತೆಯೇ ಕಾರ್ಡ್‌ ರೂಪಿಸುವ ಪ್ರಕ್ರಿಯೆ ಆರಂಭವಾಗಲಿದೆ. ಒಟ್ಟಾರೆ ಈ ಯೋಜನೆ ಜಾರಿಯು ಅಂತಿಮ ಹಂತದಲ್ಲಿದೆ ಎಂದು ಅವರು ತಿಳಿಸಿದ್ದಾರೆ. 2020-21 ನೇ ಸಾಲಿನ ರಾಜ್ಯ ಬಜೆಟ್‌ನಲ್ಲಿಯೇ ಈ ಯೋಜನೆಯನ್ನು ಪ್ರಕಟಿಸಲಾಗಿತ್ತು.

ರಾಜ್ಯ ಉಚ್ಚ ನ್ಯಾಯಾಲಯದ ನೌಕರರು, ರಾಜ್ಯ ವಿಧಾನ ಮಂಡಲದ ನೌಕರರು, ʻಆರೋಗ್ಯ ಭಾಗ್ಯ’ ಯೋಜನೆಯ ಸೌಲಭ್ಯ ಪಡೆಯುತ್ತಿರುವ ಪೊಲೀಸ್‌ ಇಲಾಖೆಯ ಸಿಬ್ಬಂದಿ, ಕರ್ನಾಟಕ ನ್ಯಾಯಾಂಗ ಅಧಿಕಾರಿಗಳು, ಅಖಿಲ ಭಾರತ ಸೇವೆಗೆ ಸೇರಿದ ಅಧಿಕಾರಿಗಳು, ಸ್ಥಳೀಯ ಸಂಸ್ಥೆಗಳು, ವಿಶ್ವವಿದ್ಯಾಲಯಗಳು, ನಿಗಮ/ ಮಂಡಳಿಗಳು, ಸಹಕಾರ ಸ೦ಸ್ಥೆಗಳ ನೌಕರರು, ಅನುದಾನಿತ ಶಿಕ್ಷಣ ಸಂಸ್ಥೆಗಳು, ಇತರೆ ಸಸ್ಥೆಗಳ ನೌಕರರು ಈ ಯೋಜನೆಯ ಲಾಭ ಪಡೆಯಲಿದ್ದಾರೆ.

ಸರ್ಕಾರಿ ನೌಕರರಿಗೆ ಸಂಬಂಧಿಸಿದ ಸುದ್ದಿಗಳಿಗಾಗಿ ಇಲ್ಲಿ (Click Here) ಕ್ಲಿಕ್‌ ಮಾಡಿ.

ಈ ಯೋಜನೆಯಡಿ ಸರ್ಕಾರಿ ನೌಕರನ ಪತಿ ಅಥವಾ ಪತ್ನಿ, ತಂದೆ ಮತ್ತು ತಾಯಿ (ಮಲ ತಾಯಿಯ ನ್ನೊಳಗೊಂಡಂತೆ (ಅವರು ಸರ್ಕಾರಿ ನೌಕರನೊಂದಿಗೆ ಸಾಮಾನ್ಯವಾಗಿ ವಾಸವಾಗಿದ್ದಲ್ಲಿ ಮತ್ತು ಅವರ ಒಟ್ಟು ಮಾಸಿಕ ಆದಾಯ- ಕನಿಷ್ಠ ಕುಟುಂಬ ಪಿಂಚಣಿ ರೂ.8500 ಹಾಗೂ ಚಾಲ್ತಿಯಲ್ಲಿದ್ದ ತುಟ್ಟಿಭತ್ಯೆಯನ್ನು ಒಳಗೊಂಡ ಮೊತ್ತವನ್ನು ಮೀರದಿದ್ದಲ್ಲಿ), ಸರ್ಕಾರಿ ನೌಕರನ ಮೇಲೆ ಸಂಪೂರ್ಣವಾಗಿ ಅವಲಂಬಿತರಾಗಿರುವ ಮಕ್ಕಳು (ದತ್ತು ಪಡೆದ ಮಕ್ಕಳು ಮತ್ತು ಮಲ ಮಕ್ಕಳನ್ನೊಳಗೊಂಡಂತೆ) ವೈದ್ಯಕೀಯ ಸೇವೆ ಪಡೆಯಲು ಅರ್ಹರಾಗಿರುತ್ತಾರೆ.

ಇದನ್ನೂ ಓದಿ: KSRTC Employees News : ಸಾರಿಗೆ ನೌಕರರರಿಗೆ ಸರ್ಕಾರಿ ನೌಕರರಾಗುವ ಭಾಗ್ಯವಿಲ್ಲ!

ಈ ಯೋಜನೆಯನ್ನು ಸುವರ್ಣ ಆರೋಗ್ಯ ಸುರಕ್ಷಾ ಟ್ರಸ್ಟ್‌ ಜಾರಿಗೆ ತರುತ್ತಿದೆ. ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆಯ ವ್ಯಾಪ್ತಿಗೆ ಸುವರ್ಣ ಆರೋಗ್ಯ ಸುರಕ್ಷಾ ಟ್ರಸ್ಟ್‌ ಒಳಪಟ್ಟಿದ್ದು, ಈ ಟ್ರಸ್ಟ್‌ ಈಗಾಗಲೇ ಕೇಂದ್ರ ಹಾಗೂ ರಾಜ್ಯ ಸರ್ಕಾರದ ಸಹಭಾಗಿತ್ವದ ಆಯುಷ್ಮಾನ್‌ ಭಾರತ – ಆರೋಗ್ಯ ಕರ್ನಾಟಕ ಯೋಜನೆಯನ್ನು ನಿರ್ವಹಿಸುತ್ತಿದೆ. ಸರ್ಕಾರಿ ನೌಕರರಿಗೆ ರೂಪಿಸಲಾಗಿರುವ ಈ ಯೋಜನೆ ಕೂಡ ಇದರ ಅಡಿಯಲ್ಲಿಯೇ ಬರಲಿದೆ.

ಕ್ಷಣ ಕ್ಷಣದ ಮಾಹಿತಿಗಾಗಿ Vistara News FaceBook ಪೇಜ್ ಫಾಲೋ ಮಾಡಿ
ಮಹತ್ವದ ಮಾಹಿತಿಗಾಗಿ ವಿಸ್ತಾರ ನ್ಯೂಸ್ ಆ್ಯಪ್ ಉಚಿತವಾಗಿ ಡೌನ್ ಲೋಡ್ ಮಾಡಿಕೊಳ್ಳಿ: Andriod App | IOS App

ಕರ್ನಾಟಕ

Course Fee Hike: ತಾಂತ್ರಿಕ ಶಿಕ್ಷಣ ಕೋರ್ಸ್‌ಗಳ ಪ್ರವೇಶ ಶುಲ್ಕ ಶೇ.10ರಷ್ಟು ಹೆಚ್ಚಳ

Course Fee Hike: ಉನ್ನತ ಶಿಕ್ಷಣ ಸಚಿವ ಡಾ.ಎಂ.ಸಿ.ಸುಧಾಕರ್ ಹಾಗೂ ವೈದ್ಯಕೀಯ ಶಿಕ್ಷಣ ಸಚಿವ ಡಾ.ಶರಣಪ್ರಕಾಶ ಪಾಟೀಲ್ ಅವರ ನೇತೃತ್ವದಲ್ಲಿ ಶುಕ್ರವಾರ ನಡೆಸಿದ ಸಭೆಯಲ್ಲಿ ತಾಂತ್ರಿಕ ಶಿಕ್ಷಣ ಕೋರ್ಸ್‌ಗಳ ಪ್ರವೇಶ ಶುಲ್ಕ ಹೆಚ್ಚಳದ ಬಗ್ಗೆ ನಿರ್ಧಾರ ಕೈಗೊಳ್ಳಲಾಗಿದೆ.

VISTARANEWS.COM


on

Koo

ಬೆಂಗಳೂರು: ವೃತ್ತಿಪರ ಕೋರ್ಸ್‌ ವ್ಯಾಸಾಂಗ ಮಾಡ ಬಯಸುವ ವಿದ್ಯಾರ್ಥಿಗಳಿಗೆ ರಾಜ್ಯ ಸರ್ಕಾರ ಬಿಗ್ ಶಾಕ್ ನೀಡಿದೆ. ತಾಂತ್ರಿಕ ಶಿಕ್ಷಣ ಕೋರ್ಸ್‌ಗಳ ಪ್ರವೇಶ ಶುಲ್ಕ ಶೇ.10ರಷ್ಟು ಹೆಚ್ಚಳ ಮಾಡಲು ಸರ್ಕಾರ ನಿರ್ಧಾರ ಮಾಡಿದ್ದು, ಇದರಿಂದ ಖಾಸಗಿ, ಅನುದಾನ ರಹಿತ ತಾಂತ್ರಿಕ ಶಿಕ್ಷಣ ಸಂಸ್ಥೆಗಳಲ್ಲಿ 2024-25ನೇ ಸಾಲಿನ ಎಂಜಿನಿಯರಿಂಗ್‌, ಆರ್ಕಿಟೆಕ್ಚರ್‌ ಕೋರ್ಸ್‌ಗಳ ಶುಲ್ಕ ಶೇ.10ರಷ್ಟು ಹೆಚ್ಚಳವಾಗಲಿದೆ.

ಪ್ರವೇಶ ಶುಲ್ಕದ ಬಗ್ಗೆ ಉನ್ನತ ಶಿಕ್ಷಣ ಇಲಾಖೆ ಪತ್ರಿಕಾ ಪ್ರಕಟಣೆ ಹೊರಡಿಸಿದ್ದು, ಖಾಸಗಿ ಅನುದಾನರಹಿತ ತಾಂತ್ರಿಕ ಶಿಕ್ಷಣ ಸಂಸ್ಥೆಗಳಲ್ಲಿ 2024-25ನೇ ಸಾಲಿನ ಎಂಜಿನಿಯರಿಂಗ್‌, ಆರ್ಕಿಟೆಕ್ಚರ್ ಕಾಲೇಜುಗಳಲ್ಲಿ ವೃತ್ತಿಪರ ಕೋರ್ಸುಗಳ ಶುಲ್ಕವನ್ನು ಶೇ.10 ರಷ್ಟು ಹೆಚ್ಚಿಸಲು ರಾಜ್ಯ ಸರ್ಕಾರ ನಿರ್ಧರಿಸಿದೆ ಎಂದು ತಿಳಿಸಿದೆ.

ಉನ್ನತ ಶಿಕ್ಷಣ ಸಚಿವ ಡಾ.ಎಂ.ಸಿ.ಸುಧಾಕರ್ ಹಾಗೂ ವೈದ್ಯಕೀಯ ಶಿಕ್ಷಣ ಸಚಿವ ಡಾ.ಶರಣಪ್ರಕಾಶ ಪಾಟೀಲ್ ಅವರು ಖಾಸಗಿ ಅನುದಾನಿತ, ಅನುದಾನರಹಿತ ವೃತ್ತಿಪರ ಶಿಕ್ಷಣ ಸಂಸ್ಥೆಗಳ ಪ್ರತಿನಿಧಿಗಳು ಹಾಗೂ ಒಕ್ಕೂಟದ ಪದಾಧಿಕಾರಿಗಳೊಂದಿಗೆ ಶುಕ್ರವಾರ ನಡೆಸಿದ ಸಭೆಯಲ್ಲಿ ಈ ನಿರ್ಧಾರಕ್ಕೆ ಬರಲಾಗಿದೆ.

ಖಾಸಗಿ ಶಿಕ್ಷಣ ಸಂಸ್ಥೆಗಳ ಒಕ್ಕೂಟವು ಶೇ.15ರಷ್ಟು ಹೆಚ್ಚಳ ಮಾಡಬೇಕು ಎಂಬ ಬೇಡಿಕೆಯನ್ನು ಸರ್ಕಾರದ ಮುಂದಿಟ್ಟಿದ್ದರು. ಸುದೀರ್ಘವಾಗಿ ನಡೆದ ಮಾತುಕತೆಯಲ್ಲಿ ಅಂತಿಮವಾಗಿ ಕಳೆದ ವರ್ಷ ನಿಗದಿಪಡಿಸಿದ್ದ ಶುಲ್ಕಕ್ಕೆ ಶೇ. 10ರಷ್ಟು ಹೆಚ್ಚಳ ಮಾಡುವ ನಿರ್ಧಾರಕ್ಕೆ ಒಮ್ಮತ ಬರಲಾಯಿತು. ಈ ಸಂಬಂಧ ಸರ್ಕಾರದ ಅಧಿಕೃತ ಆದೇಶ ಶೀಘ್ರ ಹೊರಬೀಳಲಿದೆ ಎಂದು ತಿಳಿಸಲಾಗಿದೆ.

ಇದನ್ನೂ ಓದಿ | NEET UG 2024: ನೀಟ್ ಯುಜಿ ವಿವಾದದ ಬಗ್ಗೆ ಸಿಬಿಐ ತನಿಖೆಗೆ ಮನವಿ; ಕೇಂದ್ರ, ಎನ್‌ಟಿಎಗೆ ಸುಪ್ರೀಂ ಕೋರ್ಟ್‌ ನೋಟಿಸ್

ಸಭೆಯಲ್ಲಿ ಉನ್ನತ ಶಿಕ್ಷಣ ಪ್ರಧಾನ ಕಾರ್ಯದರ್ಶಿಗಳು ಶ್ರೀಕರ್, ತಾಂತ್ರಿಕ ಶಿಕ್ಷಣ ಇಲಾಖೆಯ ಆಯುಕ್ತರಾದ ಜಗದೀಶ್, ಕೆಇಎ, ಕಾರ್ಯ ನಿರ್ವಾಹಕ ನಿರ್ದೇಶಕ ಪ್ರಸನ್ನಕುಮಾರ್, ಹಾಗೂ ಖಾಸಗಿ ತಾಂತ್ರಿಕ ಶಿಕ್ಷಣ ಸಂಸ್ಥೆಯ ಒಕ್ಕೂಟದ ಅಧ್ಯಕ್ಷರಾದ ರಾಧಾಕೃಷ್ಣ, ಪ್ರಧಾನ ಕಾರ್ಯದರ್ಶಿ, ಶ್ಯಾಮ್, ಕರ್ನಾಟಕ ರಾಜ್ಯ ಮತೀಯ ಅಲ್ಪಸಂಖ್ಯಾತ ತಾಂತ್ರಿಕ ಶಿಕ್ಷಣ ಸಂಸ್ಥೆಯ ಅಧ್ಯಕ್ಷರಾದ ಡಾ.ಶಫಿಅಹಮ್ಮದ್, ಎಂ.ಎಸ್.ರಾಮಯ್ಯ ತಾಂತ್ರಿಕ ಶಿಕ್ಷಣ ಸಂಸ್ಥೆಯ ಮುಖ್ಯಸ್ತರಾದ ಎಂ.ಆ‌ರ್.ಜಯರಾಮ್ ಮತ್ತು ಪದಾಧಿಕಾರಿಗಳು ಹಾಜರಿದ್ದರು.

Continue Reading

ಪ್ರಮುಖ ಸುದ್ದಿ

7th pay commission : ಸಂಪುಟದಲ್ಲಿ ಚರ್ಚೆಯಾಗದ 7ನೇ ವೇತನ ಆಯೋಗ ಶಿಫಾರಸು; ಸರ್ಕಾರಿ ನೌಕರರ ಸಂಘಗಳ ಆಕ್ರೋಶ

7th pay commission: ಈ ಕುರಿತು ಪತ್ರಿಕಾ ಹೇಳಿಕೆಯನ್ನು ಪ್ರಕಟಿಸಿರುವ ಸಂಘದ ಅಧ್ಯಕ್ಷರಾದ ರಮೇಶ್​ ಸಂಗಾ, 7ನೇ ವೇತನ ಆಯೋಗ ಜಾರಿ ಕುರಿತು ಸರ್ಕಾರ ಉದಾಸೀನ ಧೋರಣೆ ತಳೆಯುತ್ತಿರುವುದು ಸ್ಪಷ್ಟ. ಇದೇ ನಿಲುವು ಮುಂದುವರಿದರೆ ನೌಕರರ ಸಂಘವು ಪ್ರತಿ ಭಟನೆಯನ್ನು ಆಯೋಜಿಸುವುದು ಖಚಿತ ಎಂದು ಎಚ್ಚರಿಕೆ ನೀಡಿದ್ದಾರೆ.

VISTARANEWS.COM


on

7th Pay Commission
Koo

ಬೆಂಗಳೂರು: ಸಿಎಂ ಸಿದ್ದರಾಮಯ್ಯ ನೇತೃತ್ವದ ಸಚಿವ ಸಂಪುಟ ಸಭೆಯಲ್ಲಿ 7ನೇ ವೇತನ ಆಯೋಗದ (7th pay commission ) ಶಿಫಾರಸು ಜಾರಿಗೊಳಿಸುವ ಕುರಿತು ಯಾವುದೇ ನಿರ್ಣಯ ಕೈಗೊಳ್ಳದಿರುವುದು ಸರ್ಕಾರಿ ನೌಕರರ ಸಂಘಗಳ ಆಕ್ರೋಶಕ್ಕೆ ಕಾರಣವಾಗಿದೆ. ಸಂಪುಟ ಸಭೆಯಲ್ಲಿ ಈ ಕುರಿತು ಯಾವುದೇ ನಿರ್ಣಯ ಕೈಗೊಳ್ಳದಿರುವುದು ರಾಜ್ಯ ಸರ್ಕಾರದ ಸಮಸ್ತ ಸರ್ಕಾರಿ ನೌಕರರಿಗೆ ಬೇಸರವನ್ನುಂಟು ಮಾಡಿದೆ ಎಂಬುದಾಗಿ ಸಚಿವಾಲಯದ ನೌಕರರ ಸಂಘ ಹೇಳಿದೆ. ಆಯೋಗದ ಶಿಫಾರಸಿನ ಜಾರಿ ಕುರಿತು ನಿರೀಕ್ಷೆಯಲ್ಲಿದ್ದ ನಮಗೆ ನಿರಾಸೆಯಾಗಿದೆ ಎಂದು ಅದು ಹೇಳಿದೆ.

ಈ ಕುರಿತು ಪತ್ರಿಕಾ ಹೇಳಿಕೆಯನ್ನು ಪ್ರಕಟಿಸಿರುವ ಸಂಘದ ಅಧ್ಯಕ್ಷರಾದ ರಮೇಶ್​ ಸಂಗಾ, 7ನೇ ವೇತನ ಆಯೋಗ ಜಾರಿ ಕುರಿತು ಸರ್ಕಾರ ಉದಾಸೀನ ಧೋರಣೆ ತಳೆಯುತ್ತಿರುವುದು ಸ್ಪಷ್ಟ. ಇದೇ ನಿಲುವು ಮುಂದುವರಿದರೆ ನೌಕರರ ಸಂಘವು ಪ್ರತಿ ಭಟನೆಯನ್ನು ಆಯೋಜಿಸುವುದು ಖಚಿತ ಎಂದು ಎಚ್ಚರಿಕೆ ನೀಡಿದ್ದಾರೆ.

ಲೋಕಸಭಾ ಚುನಾವಣೆಯ ನೀತಿ ಸಂಹಿತೆ ಜಾರಿಯಾಗುವ ಮುನ್ನ ಸಿಎಂ ಸಿದ್ದರಾಮಯ್ಯ ಅವರನ್ನು ಭೇಟಿಯಾಗಿ 7ನೇ ವೇತನ ಆಯೋಗದ ಶಿಫಾರಸ್ಸನ್ನು ಜಾರಿ ಮಾಡುವಂತೆ ಸಚಿವಾಲಯದ ನೌಕರರ ಸಂಘದ ವತಿಯಿಂದ ಮನವಿ ಸಲ್ಲಿದ್ದೆವು. ಈ ವೇಳೆ ಅವರು ಚುನಾವಣೆ ಮುಗಿದ ಬಳಿಕ ಚರ್ಚಿಸಿ ಕ್ರಮ ಕೈಗೊಳ್ಳುವುದಾಗಿ ಹೇಳಿದ್ದರು. ಆದರೆ, ಚುನಾವಣೆ ಮುಗಿದ ಬಳಿಕ ನಡೆದ ಸಚಿವ ಸಂಪುಟ ಸಭೆಯಲ್ಲಿ ಈ ಕುರಿತು ಯಾವುದೇ ನಿರ್ಧಾರ ಕೈಗೊಂಡಿಲ್ಲ. ಈ ಸಂಪುಟ ಸಭೆಯಲ್ಲಿ ನಿರ್ಣಯ ತೆಗೆದುಕೊಳ್ಳುವ ನಂಬಿಕೆ ಇರಿಸಿಕೊಂಡಿದ್ದೆವು. ಅದು ಹುಸಿಯಾಗಿದೆ ಎಂದು ಹೇಳಿದ್ದಾರೆ.

ಇದನ್ನೂ ಓದಿ: ಸರ್ಕಾರಿ ನೌಕರರಿಗೆ ನಿರಾಸೆ; ಸಚಿವ ಸಂಪುಟ ಸಭೆಯಲ್ಲಿ 7ನೇ ವೇತನ ಆಯೋಗದ ಬಗ್ಗೆ ಯಾವುದೇ ನಿರ್ಣಯ ಇಲ್ಲ!

ಈಗಾಗಲೇ ವೇತನ ಆಯೋಗವು ಶಿಫಾರಸು ಮಾಡಿರುವ ಶೇ. 27.5 ಫಿಟ್ಮೆಂಟಿಗೆ, ಶೇಕಡಾ 2.5ರಷ್ಟು ಸೇರ್ಪಡೆಗೊಳಿಸಿ ಒಟ್ಟು ಶೇಕಡಾ 30ರಷ್ಟು ಫಿಟ್ಮೆಂಟ್​ನೊಂದಿಗೆ ವೇತನ ಹೆಚ್ಚಳ ಮಾಡುವುದು ನಮ್ಮ ಬೇಡಿಕೆ ಎಂಬುದಾಗಿ ಸಂಗಾ ಅವರು ತಮ್ಮ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ಸಂಪುಟ ಸಭೆಯಲ್ಲಿ ನೌಕರರಿಗೆ ನಿರಾಸೆ

ಬೆಂಗಳೂರು: ಮುಖ್ಯಮಂತ್ರಿ ಸಿದ್ದರಾಮಯ್ಯ (CM Siddaramaiah) ಅವರ ನೇತೃತ್ವದಲ್ಲಿ ಗುರುವಾರ (ಜೂನ್‌ 13) ರಾಜ್ಯ ಸಚಿವ ಸಂಪುಟ ಸಭೆ ನಡೆದಿದ್ದು, ಸರ್ಕಾರಿ ನೌಕರರಿಗೆ ಮತ್ತೆ ನಿರಾಸೆಯಾಗಿದೆ. ರಾಜ್ಯದಲ್ಲಿ ಏಳನೇ ವೇತನ ಆಯೋಗದ (7th Pay Commission) ಜಾರಿ ಕುರಿತು ಸಚಿವ ಸಂಪುಟ ಸಭೆಯಲ್ಲಿ (Karnataka Cabinet Meeting) ಯಾವುದೇ ನಿರ್ಣಯ ತೆಗೆದುಕೊಂಡಿಲ್ಲ. ಇದರಿಂದಾಗಿ, ಏಳನೇ ವೇತನ ಆಯೋಗದ ಜಾರಿ ಕುರಿತು ಭಾರಿ ನಿರೀಕ್ಷೆಯಲ್ಲಿದ್ದ ನೌಕರರಿಗೆ ಇದರಿಂದ ನಿರಾಸೆಯಾದಂತಾಗಿದೆ.

ಸಿದ್ದರಾಮಯ್ಯ ಅವರ ನೇತೃತ್ವದ ಸಚಿವ ಸಂಪುಟ ಸಭೆಯಲ್ಲಿ ಹಲವು ತೀರ್ಮಾನಗಳನ್ನು ತೆಗೆದುಕೊಳ್ಳಲಾಗಿದೆ. ಸಂಪುಟ ಸಭೆಯ ಬಳಿಕ ಕಾನೂನು, ನ್ಯಾಯ, ಮಾನವಹಕ್ಕುಗಳು, ಸಂಸದೀಯ ವ್ಯವಹಾರ ಮತ್ತು ಶಾಸನರಚನೆ ಹಾಗೂ ಪ್ರವಾಸೋದ್ಯಮ ಸಚಿವ ಎಚ್‌.ಕೆ. ಪಾಟೀಲ ಅವರು ಸುದ್ದಿಗೋಷ್ಠಿ ನಡೆಸಿ, ಸಂಪುಟ ಸಭೆಯಲ್ಲಿ ತೆಗೆದುಕೊಂಡ ಪ್ರಮುಖ ತೀರ್ಮಾನಗಳ ಕುರಿತು ಮಾಹಿತಿ ನೀಡಿದ್ದರು.

Continue Reading

ಪ್ರಮುಖ ಸುದ್ದಿ

Teachers Recruitment: ಪ್ರಾಥಮಿಕ, ಪ್ರೌಢಶಾಲಾ ಸಹ ಶಿಕ್ಷಕರು, ಮುಖ್ಯ ಶಿಕ್ಷಕರ ನೇಮಕಾತಿ: ಕೌನ್ಸೆಲಿಂಗ್‌ಗೆ ಪರಿಷ್ಕೃತ ವೇಳಾಪಟ್ಟಿ ಪ್ರಕಟ

Teachers Recruitment: ರಾಜ್ಯದ ಪ್ರಾಥಮಿಕ, ಪ್ರೌಢಶಾಲಾ ಸಹ ಶಿಕ್ಷಕರು ಮತ್ತು ಮುಖ್ಯ ಶಿಕ್ಷಕರ ನಿರ್ದಿಷ್ಟಪಡಿಸಿದ ಹುದ್ದೆಗಳಿಗೆ ಆಯ್ಕೆಯಾದ ಅಭ್ಯರ್ಥಿಗಳಿಗೆ ಕೌನ್ಸೆಲಿಂಗ್‌ ನಡೆಸಿ, ಸ್ಥಳ ನಿಯುಕ್ತಿಗೊಳಿಸಲು ಪರಿಷ್ಕೃತ ವೇಳಾಪಟ್ಟಿಯನ್ನು ಶಿಕ್ಷಣ ಇಲಾಖೆ ಪ್ರಕಟಿಸಿದೆ.

VISTARANEWS.COM


on

Teachers Recruitment
Koo

ಬೆಂಗಳೂರು: 2023-24ನೇ ಸಾಲಿಗೆ ರಾಜ್ಯದ ಪ್ರಾಥಮಿಕ, ಪ್ರೌಢಶಾಲಾ ಸಹ ಶಿಕ್ಷಕರು ಮತ್ತು ಮುಖ್ಯ ಶಿಕ್ಷಕರು ತತ್ಸಮಾನ ವೃಂದದ ನಿರ್ದಿಷ್ಟಪಡಿಸಿದ ಹುದ್ದೆಗಳಿಗೆ (Specified Post) ಲಿಖಿತ ಪರೀಕ್ಷೆ ನಡೆಸುವ ಮೂಲಕ ಭರ್ತಿ ಮಾಡಲು (Teachers Recruitment) ಶಾಲಾ ಶಿಕ್ಷಣ ಇಲಾಖೆ ಪರಿಷ್ಕೃತ ಆದೇಶ ಹೊರಡಿಸಿತ್ತು. ಇದೀಗ ನಿರ್ದಿಷ್ಟಪಡಿಸಿದ ಹುದ್ದೆಗಳಿಗೆ ಆಯ್ಕೆಯಾದ ಅಭ್ಯರ್ಥಿಗಳಿಗೆ ಕೌನ್ಸೆಲಿಂಗ್‌ ನಡೆಸಿ, ಸ್ಥಳ ನಿಯುಕ್ತಿಗೊಳಿಸಲು ಪರಿಷ್ಕೃತ ವೇಳಾಪಟ್ಟಿಯನ್ನು ಶಿಕ್ಷಣ ಇಲಾಖೆ ಪ್ರಕಟಿಸಿದೆ.

ಪ್ರಾಥಮಿಕ, ಪ್ರೌಢಶಾಲಾ ಸಹ ಶಿಕ್ಷಕರು ಮತ್ತು ಪ್ರೌಢಶಾಲಾ ಮುಖ್ಯ ಶಿಕ್ಷಕರ ಹುದ್ದೆಗಳ ಭರ್ತಿಗೆ ಲಿಖಿತ ಪರೀಕ್ಷೆ ನಡೆಸಲು ಇತ್ತೀಚೆಗೆ ಅಧಿಸೂಚನೆ ಹೊರಡಿಸಲಾಗಿತ್ತು. ಲೋಕಸಭಾ ಚುನಾವಣಾ ಮಾದರಿ ನೀತಿ ಸಹಿತೆ ಹಿನ್ನೆಲೆ ಕೌನ್ಸೆಲಿಂಗ್ ದಿನಾಂಕ ಪ್ರಕಟಿಸಿರಲಿಲ್ಲ. ಆದ್ದರಿಂದ ನಿರ್ದಿಷ್ಟಪಡಿಸಿದ ಹುದ್ದೆಗಳಿಗೆ ಆಯ್ಕೆಯಾದ ಅಭ್ಯರ್ಥಿಗಳಿಗೆ ಕೌನ್ಸಿಲಿಂಗ್‌ ನಡೆಸಲು ಇದೀಗ ಪರಿಷ್ಕೃತ ವೇಳಾ ವೇಳಾಪಟ್ಟಿಯನ್ನು ಬಿಡುಗಡೆ ಮಾಡಲಾಗಿದೆ.

ನಿರ್ದಿಷ್ಟಪಡಿಸಿದ ಹುದ್ದೆಗಳಿಗೆ ನಡೆದ ಪರೀಕ್ಷೆಯ ಫಲಿತಾಂಶ ಪಟ್ಟಿ ಪ್ರಕಟಣೆ (ಪರೀಕ್ಷಾ ಅಂಕಗಳ ಜತೆಗೆ ಅಭ್ಯರ್ಥಿಗಳ ಸೇವಾ ಅನುಭವ ಹಾಗೂ ಹೆಚ್ಚಿನ ವಿದ್ಯಾರ್ಹತೆಗೆ ನಿಗದಿಪಡಿಸಿರುವ ಅಂಕಗಳ ಕ್ರೋಡೀಕರಣದೊಂದಿಗೆ) ಮಾಡಲು ಜೂನ್‌ 11 ನಿಗದಿ ಮಾಡಲಾಗಿದೆ. ಪ್ರಕಟಿತ ಫಲಿತಾಂಶ ಪಟ್ಟಿಗೆ ಸೇವಾನುಭವ ಹಾಗೂ ವಿದ್ಯಾರ್ಹತೆ ಸಂಬಂಧ ಅಂಕಗಳ ಬಗ್ಗೆ ಆಕ್ಷೇಪಣೆಗಳನ್ನು ಸಲ್ಲಿಸಲು ಜೂನ್‌ 11ರಿಂದ 14ರವರೆಗೆ ಅವಕಾಶ ನೀಡಲಾಗಿದೆ.

ಇನ್ನು ಆಕ್ಷೇಪಣೆಗಳನ್ನು ಪರಿಶೀಲಿಸಿ ತಂತ್ರಾಂಶದಲ್ಲಿ ಸರಿಪಡಿಸಿ ಸರಿಪಡಿಸಲು ಜೂನ್‌ 15ರಿಂದ 19ರವರೆಗೆ ಅವಕಾಶ ನೀಡಲಾಗಿದೆ. ಅದೇ ರೀತಿ ಜೂನ್‌ 24ರಂದು ಅಂತಿಮ ಅರ್ಹತಾ ಪಟ್ಟಿ ಪ್ರಕಟಿಸಲು ಸೂಚಿಸಲಾಗಿದೆ.

ಇದನ್ನೂ ಓದಿ | University Grants Commission : ಇನ್ನು ಮುಂದೆ ವಿಶ್ವವಿದ್ಯಾಲಯಗಳಲ್ಲಿ ವರ್ಷಕ್ಕೆ ಎರಡು ಬಾರಿ ಅಡ್ಮಿಷನ್​

Continue Reading

ಕರ್ನಾಟಕ

Govt Employees: ಪ್ರತಿ ಸೋಮವಾರ ಕೇಂದ್ರ ಕಚೇರಿಗಳಿಗೆ ಅಧಿಕಾರಿ, ನೌಕರರ ಹಾಜರು ಕಡ್ಡಾಯ: ರಾಜ್ಯ ಸರ್ಕಾರ ಆದೇಶ

Govt Employees: ರೈತರಿಗೆ ಅನುಕೂಲವಾಗಲು ರಾಜ್ಯ ಸರ್ಕಾರ ಈ ಆದೇಶ ಹೊರಡಿಸಿದೆ. ಅಧಿಕಾರಿ, ನೌಕರರು ಪ್ರತಿ ಸೋಮವಾರಗಳಂದು ತಮ್ಮ ತಮ್ಮ ಕೇಂದ್ರ ಸ್ಥಾನದ ಕಚೇರಿಗಳಲ್ಲಿ ಹಾಜರಿದ್ದು, ಕರ್ತವ್ಯ ನಿರ್ವಹಿಸಬೇಕು ಎಂದು ಸೂಚಿಸಲಾಗಿದೆ.

VISTARANEWS.COM


on

Govt Employees
Koo

ಬೆಂಗಳೂರು: ಪ್ರತಿಯೊಂದು ಇಲಾಖೆಯ ಅಧಿಕಾರಿ, ನೌಕರರು (Govt Employees) ಪ್ರತಿ ಸೋಮವಾರಗಳಂದು ತಮ್ಮ ತಮ್ಮ ಕೇಂದ್ರ ಸ್ಥಾನದ ಕಚೇರಿಗಳಲ್ಲಿ ಹಾಜರಿದ್ದು, ಕಚೇರಿಗಳಿಗೆ ಆಗಮಿಸುವ ಜನರಿಗೆ ಸರ್ಕಾರಿ ಸೇವೆಗಳನ್ನು ಒದಗಿಸಲು ಅಗತ್ಯ ಕ್ರಮಗಳನ್ನು ತೆಗೆದುಕೊಳ್ಳಬೇಕು ಎಂದು ರಾಜ್ಯ ಸರ್ಕಾರ ಆದೇಶ ಹೊರಡಿಸಿದೆ.

ಈ ಬಗ್ಗೆ ಸಿಎಂ ಸಿದ್ದರಾಮಯ್ಯ ಅವರ ಸೂಚನೆಯಂತೆ ಸಿಬ್ಬಂದಿ ಮತ್ತು ಆಡಳಿತ ಸುಧಾರಣಾ ಇಲಾಖೆಯ ಸರ್ಕಾರದ ಅಧೀನ ಕಾರ್ಯದರ್ಶಿ ವಿಮಲಾಕ್ಷಿ. ಬಿ ಅವರು ಎಲ್ಲಾ ಸರ್ಕಾರಿ ಇಲಾಖೆಗಳಿಗೆ ಆದೇಶ ಹೊರಡಿಸಿದ್ದಾರೆ.

ಕರ್ನಾಟಕವು ಕೃಷಿ ಪ್ರಧಾನವಾದ ರಾಜ್ಯವಾಗಿದ್ದು, ಸಾಮಾನ್ಯವಾಗಿ ಕೃಷಿಕರು ಸೋಮವಾರದ ದಿನದಂದು ತುಸುಮಟ್ಟಿಗೆ ಕೃಷಿ ಚಟುವಟಿಕೆಗಳಿಗೆ ಬಿಡುವು ನೀಡಿ, ಸಂತೆ, ಪೇಟೆ ಕೆಲಸಗಳು ಹಾಗೂ ಕಚೇರಿಗಳಿಗೆ ತಮ್ಮ ಕೆಲಸಗಳಿಗಾಗಿ ಹೋಗುವುದು ಹಿಂದಿನಿಂದ ನಡೆದುಕೊಂಡು ಬಂದ ವಾಡಿಕೆಯಾಗಿದೆ.

ಈ ಹಿಂದೆ, ಪ್ರತಿ ಸೋಮವಾರಗಳಂದು ತಾಲೂಕು ಮತ್ತು ಜಿಲ್ಲಾ ಮಟ್ಟದ ಅಧಿಕಾರಿಗಳಾದಿಯಾಗಿ ಎಲ್ಲರೂ ತಮ್ಮ ತಮ್ಮ ಕೇಂದ್ರಸ್ಥಾನದ ಕಚೇರಿಗಳಲ್ಲಿದ್ದು, ಜನರ ಕೆಲಸಗಳನ್ನು ಮಾಡುತ್ತಿದ್ದರು. ಆದರೆ, ಕೃಷಿಯೇತರ ಹಿನ್ನೆಲೆಯಿಂದ ಅಧಿಕಾರಿಗಳು, ನೌಕರರು ಸರ್ಕಾರಿ ಸೇವೆಗೆ ಬರುವ ಪ್ರಮಾಣ ಹೆಚ್ಚಿದ ಮೇಲೆ ಈ ಪದ್ಧತಿಯಲ್ಲಿ ಸ್ವಲ್ಪ ಮಟ್ಟಿಗೆ ಏರು ಪೇರಾಗಿದೆ. ಆದ್ದರಿಂದ, ಪ್ರತಿಯೊಂದು ಇಲಾಖೆಯ ಅಧಿಕಾರಿ, ನೌಕರರು ಪ್ರತಿ ಸೋಮವಾರಗಳಂದು ತಮ್ಮ ತಮ್ಮ ಕೇಂದ್ರಸ್ಥಾನದ ಕಚೇರಿಗಳಲ್ಲಿ ಹಾಜರಿದ್ದು, ಕರ್ತವ್ಯ ನಿರ್ವಹಿಸಲು ಅಗತ್ಯ ಕ್ರಮ ಕೈಗೊಳ್ಳುವಂತೆ ಎಂಎಲ್‌ಸಿ ಅಡಗೂರು ಎಚ್.ವಿಶ್ವನಾಥ್ ಮನವಿ ಕೋರಿದ್ದರು. ಈ ಬಗ್ಗೆ ಸಕಾರಾತ್ಮಕವಾಗಿ ಸಿಎಂ ಸಿದ್ದರಾಮಯ್ಯ ಸ್ಪಂದಿಸಿ, ಅಗತ್ಯ ಕ್ರಮವಹಿಸಲು ಸೂಚನೆ ನೀಡಿದ್ದಾರೆ.

ಸಾರಿಗೆ ನಿಗಮಕ್ಕೂ ಅನ್ವಯ

ಪ್ರತಿ ಸೋಮವಾರಗಳಂದು ಪ್ರತಿಯೊಂದು ಇಲಾಖೆಯ ಅಧಿಕಾರಿ, ನೌಕರರು ತಮ್ಮ ಕೇಂದ್ರ ಸ್ಥಾನದ ಕಚೇರಿಗಳಲ್ಲಿ ಹಾಜರಿದ್ದು, ಕರ್ತವ್ಯ ನಿರ್ವಹಿಸಬೇಕು ಎಂಬ ರಾಜ್ಯ ಸರ್ಕಾರ ಸೂಚನೆಯು ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ನಿಗಮದಕ್ಕೂ ಅನ್ವಯವಾಗಿದೆ. ನಿಗಮ ವ್ಯಾಪ್ತಿಯ ಎಲ್ಲಾ ಕಚೇರಿಗಳಲ್ಲಿ ತುರ್ತು ಕಾರ್ಯಗಳನ್ನು ಹೊರತುಪಡಿಸಿ. ಪ್ರತಿ ಸೋಮವಾರಗಳಂದು ತಮ್ಮ ಕೇಂದ್ರ ಸ್ಥಾನದ ಕಚೇರಿಗಳಲ್ಲಿ ಹಾಜರಿದ್ದು, ಸೇವೆ ಒದಗಿಸಬೇಕು ಎಂದು ಕೆಎಸ್‌ಆರ್‌ಟಿಸಿ ವ್ಯವಸ್ಥಾಪಕ ಸುತ್ತೋಲೆ ಹೊರಡಿಸಿದ್ದಾರೆ.

Continue Reading
Advertisement
Dina Bhavishya
ಭವಿಷ್ಯ1 hour ago

Dina Bhavishya : ಗೌಪ್ಯ ವಿಷಯವನ್ನು ಹಂಚಿಕೊಂಡರೆ ಈ ರಾಶಿಯವರಿಗೆ ಅಪಾಯ ಗ್ಯಾರಂಟಿ!

World War 3
ಪ್ರಮುಖ ಸುದ್ದಿ7 hours ago

World War 3: ಜೂನ್ 18ರಿಂದ 3ನೇ ಮಹಾಯುದ್ಧ ಶುರು; ಖ್ಯಾತ ಜ್ಯೋತಿಷಿಯ ಭವಿಷ್ಯವಾಣಿ ಸಂಚಲನ

Cholera outbreak
ಕರ್ನಾಟಕ9 hours ago

Cholera outbreak: ಕಲುಷಿತ ನೀರು ಸೇವನೆ; ಮಧುಗಿರಿಯ ಚಿನ್ನೇನಹಳ್ಳಿಯಲ್ಲಿ ವ್ಯಕ್ತಿಗೆ ಕಾಲರಾ ದೃಢ

NCERT Textbooks
ಪ್ರಮುಖ ಸುದ್ದಿ9 hours ago

NCERT Textbooks: ರಾಜಕೀಯ ಶಾಸ್ತ್ರದ ಪಠ್ಯದಿಂದ ‘ಬಾಬ್ರಿ ಮಸೀದಿ’ ಅಧ್ಯಾಯ ತೆಗೆದ ಎನ್‌ಸಿಇಆರ್‌ಟಿ!

Parenting Tips
ಪ್ರಮುಖ ಸುದ್ದಿ10 hours ago

Parenting Tips: ನೀವು ಹೊಸ ಅಪ್ಪ ಅಮ್ಮಂದಿರೇ? ನಿಮಗಿದೆ ಇಲ್ಲಿ ಮುಖ್ಯವಾದ ಟಿಪ್ಸ್!

Drowns in Lake
ಕರ್ನಾಟಕ10 hours ago

Drowns in lake: ಸ್ನೇಹಿತರ ಜತೆ ಕೆರೆಗೆ ಈಜಲು ಹೋದ ಬಾಲಕ ನೀರುಪಾಲು

Petrol Diesel Price
ಕರ್ನಾಟಕ11 hours ago

Petrol Diesel Price: ಪೆಟ್ರೋಲ್, ಡೀಸೆಲ್ ದರ ಏರಿಕೆಗೂ ಚುನಾವಣಾ ಫಲಿತಾಂಶಕ್ಕೂ ಸಂಬಂಧವಿಲ್ಲ ಎಂದ ಸಿಎಂ

Amit Shah
ದೇಶ11 hours ago

Amit Shah: ಕಾಶ್ಮೀರದಲ್ಲಿ ಒಬ್ಬನೇ ಒಬ್ಬ ಉಗ್ರ ಉಳಿಯಬಾರದು; ಖಡಕ್‌ ಆದೇಶ ಕೊಟ್ಟ ಅಮಿತ್‌ ಶಾ

Karnataka Weather Forecast
ಮಳೆ11 hours ago

Karnataka weather : ಭಾನುವಾರ ರಾಯಚೂರಿನಲ್ಲಿ ಅಬ್ಬರಿಸಿದ ವರುಣ; ನಾಳೆಗೂ ಇದೆ ಮಳೆ ಅಲರ್ಟ್‌

Actor Darshan
ಪ್ರಮುಖ ಸುದ್ದಿ11 hours ago

Actor Darshan: ರೇಣುಕಾಸ್ವಾಮಿ ಕುಟುಂಬಕ್ಕಷ್ಟೇ ಅಲ್ಲ, ಚಿತ್ರರಂಗಕ್ಕೂ ನ್ಯಾಯ ಸಿಗಬೇಕು: ಕಿಚ್ಚ ಸುದೀಪ್‌

Sharmitha Gowda in bikini
ಕಿರುತೆರೆ8 months ago

Geetha Serial Kannada: ನಿದ್ದೆ ಕದ್ದ ಚೋರಿ! ನಟಿ `ಭಾನುಮತಿ’ ಹಾಟ್‌ ಪೋಟೊಗಳಿಗೆ ಫ್ಯಾನ್ಸ್ ಫುಲ್ ಫಿದಾ

Kannada Serials
ಕಿರುತೆರೆ8 months ago

Kannada Serials TRP: 2ನೇ ಸ್ಥಾನದಲ್ಲಿ 2 ಧಾರಾವಾಹಿಗಳು; ಟಿಆರ್‌ಪಿ ರೇಸ್‌ನಲ್ಲಿಲ್ಲ ಭಾಗ್ಯಲಕ್ಷ್ಮೀ!

Bigg Boss- Saregamapa 20 average TRP
ಕಿರುತೆರೆ8 months ago

Kannada Serials TRP: ಏಳನೇ ಸ್ಥಾನಕ್ಕೆ ʻಅಮೃತಧಾರೆʼ ಕುಸಿತ; ಬಿಗ್‌ ಬಾಸ್‌-ಸರಿಗಮಪ ಟಿಆರ್‌ಪಿ ಎಷ್ಟು?

galipata neetu
ಕಿರುತೆರೆ7 months ago

Kanyadana Serial: ಕಿರುತೆರೆಗೆ ಮತ್ತೆ ಎಂಟ್ರಿ ಕೊಟ್ಟ ʻಗಾಳಿಪಟʼ ಖ್ಯಾತಿಯ ʻನೀತುʼ!

Kannada Serials
ಕಿರುತೆರೆ9 months ago

Kannada Serials TRP: ನಾಲ್ಕನೇ ಸ್ಥಾನಕ್ಕೆ ಕುಸಿತ ಕಂಡ ʻಸೀತಾ ರಾಮʼ; ಟಿಆರ್‌ಪಿ ರೇಸ್‌ಗೆ ʻಭಾಗ್ಯಲಕ್ಷ್ಮಿʼ ಬ್ಯಾಕ್‌!

Kannada Serials
ಕಿರುತೆರೆ8 months ago

Kannada Serials TRP: ಟಿಆರ್‌ಪಿಯಲ್ಲಿ ʻಭಾಗ್ಯಲಕ್ಷ್ಮೀʼ ಹವಾ; ʻಪುಟ್ಟಕ್ಕನ ಮಕ್ಕಳುʼ ಧಾರಾವಾಹಿಗೆ ಸಂಕಷ್ಟ!

Bigg Boss' dominates TRP; Sita Rama fell to the sixth position
ಕಿರುತೆರೆ8 months ago

Kannada Serials TRP: ಟಿಆರ್‌ಪಿಯಲ್ಲಿ ʻಬಿಗ್ ಬಾಸ್ʼದೇ ಮೇಲುಗೈ; 6ನೇ ಸ್ಥಾನಕ್ಕೆ ಕುಸಿದ ʻಸೀತಾ ರಾಮʼ

geetha serial Dhanush gowda engagement
ಕಿರುತೆರೆ6 months ago

Dhanush Gowda: ಗೀತಾ ಧಾರಾವಾಹಿ ನಟನ ನಿಶ್ಚಿತಾರ್ಥ; ಭವ್ಯಾಳ ಕಮೆಂಟ್‌ ಬಾಕ್ಸ್‌ ಆಫ್‌!

varun
ಕಿರುತೆರೆ7 months ago

Brindavana Serial: ʼಬೃಂದಾವನʼ ಧಾರಾವಾಹಿಯಲ್ಲಿ ದೊಡ್ಡ ಟ್ವಿಸ್ಟ್‌; ಪ್ರಮುಖ ಪಾತ್ರಧಾರಿಯೇ ಬದಲು

Kannada Serials
ಕಿರುತೆರೆ9 months ago

Kannada Serials TRP: ಟಿಆರ್‌ಪಿಯಲ್ಲಿ ಏರಿಕೆ ಕಂಡ ʻಅಮೃತಧಾರೆʼ; ʻಗಟ್ಟಿಮೇಳʼಕ್ಕೆ ನಾಲ್ಕನೇ ಸ್ಥಾನ!

Renukaswamy murder case The location of the accused is complete
ಸಿನಿಮಾ12 hours ago

Renuka Swamy murder : ಭೀಕರವಾಗಿ ಕೊಂದರೂ ಆರೋಪಿಗಳಿಗೆ ಕಾಡುತ್ತಿಲ್ವಾ ಪಾಪಪ್ರಜ್ಞೆ? ನಗುತ್ತಲೇ ಹೊರಬಂದ ಪವಿತ್ರಾ ಗೌಡ, ಪವನ್‌

Renuka swamy murder
ಚಿತ್ರದುರ್ಗ13 hours ago

Renuka swamy Murder : ರೇಣುಕಾಸ್ವಾಮಿ ಕುಟುಂಬಸ್ಥರಿಗೆ ಸಾಂತ್ವನ ಹೇಳಿದ ಬಾಳೆಹೊನ್ನೂರು ಶ್ರೀಗಳು

Vijayanagara News
ವಿಜಯನಗರ18 hours ago

Vijayanagara News : ಕೆಲಸಕ್ಕೆ ಚಕ್ಕರ್, ಸಂಬಳಕ್ಕೆ ಹಾಜರ್! ಹಾರಕನಾಳು ಗ್ರಾಪಂ ಪಿಡಿಓಗಾಗಿ ಗ್ರಾಮಸ್ಥರ ಹುಡುಕಾಟ

Actor Darshan
ಯಾದಗಿರಿ2 days ago

Actor Darshan : ಬಾಸ್‌ ಅಂತ ಯಾಕ್‌ ಬಕೆಟ್‌ ಹಿಡಿಯುತ್ತೀರಾ ಅಂದವನಿಗೆ ದರ್ಶನ್ ಅಭಿಮಾನಿಯಿಂದ ಜೀವ ಬೆದರಿಕೆ!

Karnataka Weather Forecast
ಮಳೆ3 days ago

Karnataka Weather : ಕರಾವಳಿ, ಉತ್ತರ ಒಳನಾಡಿನಲ್ಲಿ ವರುಣಾರ್ಭಟ; ನಾಳೆಯು ಹಲವೆಡೆ ಸಿಕ್ಕಾಪಟ್ಟೆ ಮಳೆ

Actor Darshan
ಬೆಂಗಳೂರು3 days ago

Actor Darshan : ರೇಣುಕಾಸ್ವಾಮಿಯನ್ನು ಕಿಡ್ನ್ಯಾಪ್ ಮಾಡಿ ಕರೆತರುವ ದೃಶ್ಯ ಸಿಸಿ ಕ್ಯಾಮೆರಾದಲ್ಲಿ ಸೆರೆ!

actor Darshan
ಬೆಂಗಳೂರು3 days ago

Actor Darshan : ರೇಣುಕಾಸ್ವಾಮಿ ಕೊಲೆ ಕೇಸ್‌ನಲ್ಲಿ ಮತ್ತಿಬ್ಬರು ಸರೆಂಡರ್‌; ಆರೋಪಿಗಳ ಸಂಖ್ಯೆ 16ಕ್ಕೆ ಏರಿಕೆ

Actor Darshan
ಸಿನಿಮಾ3 days ago

Actor Darshan : ರೇಣುಕಾಸ್ವಾಮಿ ‌ಮೃತದೇಹ ಬಿಸಾಡಿ ಬಳಿಕ ಸಾಕ್ಷ್ಯಇದ್ದ 2 ಮೊಬೈಲ್‌ಗಳನ್ನು ಮೋರಿಗೆ ಎಸೆದ್ರಾ ಆರೋಪಿಗಳು?

karnataka weather Forecast
ಮಳೆ6 days ago

Karnataka Weather : ಭಾರಿ ಮಳೆಗೆ ಗುಡ್ಡದಿಂದ ಉರುಳಿ ಬಿದ್ದ ಬಂಡೆಗಲ್ಲು; ಬೆಂಗಳೂರಲ್ಲೂ ಸಂಜೆ ವರ್ಷಧಾರೆ

actor Darshan
ಚಿತ್ರದುರ್ಗ6 days ago

Actor Darshan: ರೇಣುಕಾ ಸ್ವಾಮಿ ಕೊಲೆ ಕೇಸ್‌ನಲ್ಲಿ ದರ್ಶನ್‌ ಅರೆಸ್ಟ್‌; ಪ್ರಕರಣವನ್ನು ಸಿಬಿಐಗೆ ವಹಿಸಲು ಒತ್ತಾಯ

ಟ್ರೆಂಡಿಂಗ್‌