Vanshika Anjani kashyapa : ಇವೆಂಟ್‌ ಮ್ಯಾನೇಜ್ಮೆಂಟ್‌ ಹೆಸರಲ್ಲಿ ನಿಶಾ ದೋಖಾ! - Vistara News

ಕರ್ನಾಟಕ

Vanshika Anjani kashyapa : ಇವೆಂಟ್‌ ಮ್ಯಾನೇಜ್ಮೆಂಟ್‌ ಹೆಸರಲ್ಲಿ ನಿಶಾ ದೋಖಾ!

Vanshika Anjani kashyapa : ಮಾಸ್ಟರ್ ಆನಂದ್ ಪುತ್ರಿ ವಂಶಿಕಾ ಹೆಸರು ಬಳಸಿ ವಂಚನೆ (Fraud Case) ಮಾಡಿರುವ ನಿಶಾ ನರಸಪ್ಪ ವಿರುದ್ಧ ಒಂದೊಂದು ಪ್ರಕರಣಗಳು ಬೆಳಕಿಗೆ ಬರುತ್ತಿದೆ. ಇವೆಂಟ್‌ ಮ್ಯಾನೇಜ್ಮೆಂಟ್‌ ಹೆಸರಲ್ಲಿ ದೋಖಾ ಮಾಡಿರುವುದು ತಿಳಿದು ಬಂದಿದೆ.

VISTARANEWS.COM


on

nisha narapasa fraud case
ನ್ಯಾಯಾಂಗ ಬಂಧನದಲ್ಲಿರುವ ನಿಶಾ ನರಸಪ್ಪ
ಮಹತ್ವದ, ಕುತೂಹಲಕರ ಸುದ್ದಿಗಾಗಿ ಫಾಲೊ ಮಾಡಿ
Koo

ಬೆಂಗಳೂರು: ವಂಶಿಕಾ ಮಾಸ್ಟರ್‌ ಆನಂದ್‌ ಹೆಸರಿನಲ್ಲಿ (Vanshika Anjani kashyapa) ಹಣ ಪೀಕಿದ ನಿಶಾ ನರಸಪ್ಪಗೆ 14 ದಿನಗಳ ನ್ಯಾಯಾಂಗ ಬಂಧನಕ್ಕೆ ಕೋರ್ಟ್‌ ಆದೇಶಿಸಿದೆ. ಸದಾಶಿವನಗರ ಪೊಲೀಸ್ ಠಾಣೆಯಲ್ಲಿ ದೂರು ದಾಖಲಾದ ಬಳಿಕ ಒಂದೊಂದು ಹಳೇ ವಂಚನೆ ಕೇಸ್‌ಗಳು (Fraud Case) ಬೆಳಕಿಗೆ ಬರುತ್ತಿವೆ. ನಿಶಾ ನರಸಪ್ಪ (nisha narasapa) ವಿರುದ್ಧ ಇದೇ ಮೊದಲಲ್ಲ, ಈ ಹಿಂದೆಯೇ ವಂಚನೆ ಕೇಸ್‌ ದಾಖಲಾಗಿದೆ.

ಇವೆಂಟ್ ಮ್ಯಾನೇಜ್ಮೆಂಟ್ ಹೆಸರಲ್ಲಿ ತಾರಾ ಎಂಬುವರಿಗೆ 20 ಲಕ್ಷ ರೂ. ವಂಚನೆ ಮಾಡಿರುವ ಆರೋಪವು ಕೇಳಿ ಬಂದಿದೆ. ಈ ಬಗ್ಗೆ ಕಳೆದ ತಿಂಗಳು ಯಲಹಂಕ ನ್ಯೂ ಟೌನ್ ಠಾಣೆಯಲ್ಲಿ ದೂರು ದಾಖಲಾಗಿದೆ. ಇದೇ ರೀತಿ ಕೋಣನಕುಂಟೆ ಹಾಗೂ ಜ್ಞಾನಭಾರತಿ ಠಾಣೆಯಲ್ಲೂ ವಂಚನೆ ದೂರುಗಳು ದಾಖಲಾಗಿದೆ. ಸದಾಶಿವನಗರ ಠಾಣೆಯಲ್ಲಿ ದಾಖಲಾದ ಕೇಸ್‌ನಲ್ಲಿ ಬರೋಬ್ಬರಿ 35 ಲಕ್ಷ ರೂ. ದೋಖಾ ಆಗಿದೆ.

ಲಾಭಾಂಶದ ನಶೆ ಎರಿಸುವ ನಿಶಾ

ಸಾಲದ ರೂಪದಲ್ಲಿ ಹಾಗೂ ಇನ್ವೆಸ್ಟ್ ಮಾಡಿದರೆ ಲಾಭಾಂಶ ನೀಡುವುದಾಗಿ ಆಸೆ ತೋರಿ ನಿಶಾ ನರಸಪ್ಪ ಮೋಸ ಮಾಡಿರುವುದು ಕಂಡು ಬಂದಿದೆ. ಮೊದ ಮೊದಲು ಲಾಭಾಂಶದ ಹಣ ಕೊಟ್ಟು ಬಳಿಕ ಎರಡರಷ್ಟು ಹಣ ಪಡೆದಿದ್ದಾರೆ. ರಾಮನಗರ ಮೂಲದ ನಿಶಾ ನರಸಪ್ಪ, ಬೆಂಗಳೂರಿನ ದೊಡ್ಡ ಮಾಲ್‌ಗಳಲ್ಲಿ ಇವೆಂಟ್ ಮ್ಯಾನೇಜ್ಮೆಂಟ್ ಮಾಡುತ್ತಿದ್ದರು. ಇದಲ್ಲದೆ ಬೆಂಗಳೂರು ಹೊರ ವಲಯದ ರೆಸಾರ್ಟ್‌ಗಳಲ್ಲಿ ಶೂಟಿಂಗ್ ಮಾಡುವ ಮೂಲಕ ಪೋಷಕರಿಗೆ ಯಮಾರಿಸುತ್ತಿದ್ದರು ಎನ್ನಲಾಗಿದೆ.

ಸದ್ಯ ಸದಾಶಿವನಗರ ಠಾಣೆಗೆ ಹರಿದು ಬರುತ್ತಿರುವ ದೂರುಗಳನ್ನು ತಮ್ಮ ಮನೆ ವ್ಯಾಪ್ತಿಯ ಠಾಣೆಯಲ್ಲಿ ನೀಡಲು ಸೂಚನೆ ನೀಡಲಾಗಿದೆ. ಹೈಕೋರ್ಟ್‌ನಲ್ಲೂ ಓರ್ವ ಮಹಿಳೆ ಕೇಸ್ ಹಾಕಿದ್ದು, ವಿಚಾರಣೆ ಹಂತದಲ್ಲಿದೆ. ಲಕ್ಷಾಂತರ ಹಣದಲ್ಲಿ ಲಕ್ಸುರಿ ಲೈಫ್ ಲೀಡ್ ಮಾಡುತ್ತಿದ್ದ ನಿಶಾ ಈಗ ನ್ಯಾಯಾಂಗ ಬಂಧನದಲ್ಲಿದ್ದಾರೆ.

ಇದನ್ನೂ ಓದಿ:Prabhas New Movie: ಬಿಗ್‌ ಅಪ್‌ಡೇಟ್‌ ಕೊಟ್ಟ ಪ್ರಭಾಸ್‌; ಫ್ಯಾನ್ಸ್‌ಗೆ ಭರ್ಜರಿ ಸರ್‌ಪ್ರೈಸ್‌!

vanshika anjani kashyapa and nisha narasapa
ವಂಶಿಕಾ ಹೆಸರಲ್ಲಿ ವಂಚನೆ ಮಾಡಿರುವ ನಿಶಾ ನರಸಪ್ಪ

ನಿಶಾ ನರಸಪ್ಪ ಬಲೆಗೆ ಬಿದಿದ್ದು ಹೇಗೆ?

ವಂಶಿಕಾ ಅಂಜನಿ ಕಶ್ಯಪ ಕಿರುತೆರೆಯಲ್ಲಿ ತನ್ನದೆ ಛಾಪು ಮೂಡಿಸಿ ಎಲ್ಲರ ಮನ ಗೆಲುತ್ತಿರುವ ಪೋರಿ. ತಂದೆ ನಟ ಮಾಸ್ಟರ್‌ ಆನಂದ್‌ರಂತೆ (Master anadh) ಅರಳು ಹುರಿದಂತೆ ಮಾತನಾಡುವ ವಂಶಿಕಾ (Vanshika Anjani kashyapa) ಸೋಶಿಯಲ್‌ ಮೀಡಿಯಾದಲ್ಲೂ (Social Media) ಹೆಚ್ಚು ಸದ್ದು ಮಾಡುತ್ತಿದ್ದಾಳೆ. ಈ ಬಾಲನಟಿ ವಂಶಿಕಾ ಹೆಸರನ್ನು ದುರುಪಯೋಗ (Fraud Case) ಮಾಡಿಕೊಳ್ಳಲಾಗುತ್ತಿದೆ ಎಂದು ತಾಯಿ ಯಶಸ್ವಿನಿ ಜು.13ರಂದು ಠಾಣೆ ಮೆಟ್ಟಿಲೇರಿದ್ದರು.

ಆ್ಯಡ್ ಶೂಟ್, ಕಾರ್ಯಕ್ರಮಗಳು, ಮಕ್ಕಳ ಟ್ಯಾಲೆಂಟ್ ಶೋ, ಖಾಸಗಿ ಚಾನಲ್‌ನಲ್ಲಿ ಟ್ಯಾಲೆಂಟ್ ಶೋ ನೆಪದಲ್ಲಿ ವಂಚನೆ ಮಾಡುತ್ತಿರುವ ಆರೋಪ ಕೇಳಿ ಬಂದಿತ್ತು. ನಿಶಾ ನರಸಪ್ಪ ಎಂಬಾಕೆ ವಂಶಿಕಾ ಹೆಸರಿನಲ್ಲಿ ಹಲವರಿಂದ ಲಕ್ಷಾಂತರ ರೂಪಾಯಿ ಪಡೆದಿದ್ದರು. ಈ ವಿಷಯ ತಿಳಿಯುತ್ತಿದ್ದಂತೆ ಸದಾಶಿವನಗರ ಠಾಣೆಯಲ್ಲಿ ವಂಶಿಕಾ ತಾಯಿ ಯಶಸ್ವಿನಿ ಆನಂದ್ ದೂರು ದಾಖಲಿಸಿದ್ದರು. ಸೋಶಿಯಲ್‌ ಮೀಡಿಯಾದಲ್ಲಿ ಎನ್‌ಎನ್‌ ಪ್ರೊಡಕ್ಷನ್‌ ಎಂಬ ಪೇಜ್‌ ತೆರೆದು, ಪೋಷಕರಿಗೆ ವಂಚನೆ ಮಾಡುತ್ತಿದ್ದಾರೆ ಎನ್ನಲಾಗಿದೆ. ನಿಮ್ಮ ಮಕ್ಕಳಿಗೂ ಆಲ್ಬಂನಲ್ಲಿ ಫೋಟೊ ಶೂಟ್‌ಗೆ ಚಾನ್ಸ್ ಕೊಡಿಸುವುದಾಗಿ ಹೇಳಿ ನೂರಾರು ಪೋಷಕರಿಗೆ ವಂಚನೆ ಮಾಡಿದ್ದಾರೆ.

ರಾಜ್ಯದ ಇನ್ನಷ್ಟು ಸುದ್ದಿಗಾಗಿ ಈ ಲಿಂಕ್‌ ಕ್ಲಿಕ್‌ ಮಾಡಿ

ಕ್ಷಣ ಕ್ಷಣದ ಮಾಹಿತಿಗಾಗಿ Vistara News FaceBook ಪೇಜ್ ಫಾಲೋ ಮಾಡಿ
ಮಹತ್ವದ ಮಾಹಿತಿಗಾಗಿ ವಿಸ್ತಾರ ನ್ಯೂಸ್ ಆ್ಯಪ್ ಉಚಿತವಾಗಿ ಡೌನ್ ಲೋಡ್ ಮಾಡಿಕೊಳ್ಳಿ: Andriod App | IOS App
Continue Reading
Click to comment

Leave a Reply

Your email address will not be published. Required fields are marked *

ಮೈಸೂರು

Murder Case : ಮೈಸೂರಿನಲ್ಲಿ ಅನ್ನದಾನೇಶ್ವರ ಮಠದ ಹಿರಿಯ ಸ್ವಾಮೀಜಿಯ ಬರ್ಬರ ಕೊಲೆ

Murder case : ಮೈಸೂರಿನಲ್ಲಿ ಅನ್ನದಾನೇಶ್ವರ ಮಠದ ಹಿರಿಯ ಸ್ವಾಮೀಜಿಯನ್ನು ಅವರ ಸಹಾಯಕನೇ ಬರ್ಬರವಾಗಿ ಕೊಂದಿದ್ದಾನೆ. ಕೊಲೆಗೆ ನಿಖರ ಕಾರಣ ತಿಳಿದು ಬಂದಿಲ್ಲ. ಸ್ಥಳಕ್ಕೆ ಪೊಲೀಸರು ದೌಡಾಯಿಸಿದ್ದು ಪರಿಶೀಲನೆ ನಡೆಸುತ್ತಿದ್ದಾರೆ.

VISTARANEWS.COM


on

By

murder case
Koo

ಮೈಸೂರು: ಮೈಸೂರಿನಲ್ಲಿ ಹಿರಿಯ ಸ್ವಾಮೀಜಿಯೊಬ್ಬರ ಬರ್ಬರ (Murder case) ಕೊಲೆಯಾಗಿದೆ. ಮೈಸೂರಿನ ಸಿದ್ದಾರ್ಥನಗರದಲ್ಲಿರುವ ಅನ್ನದಾನೇಶ್ವರ ಮಠದ ಶಿವಾನಂದ (90) ಸ್ವಾಮೀಜಿ ಕೊಲೆಯಾದವರು.

ಶಿವಾನಂದ ಸ್ವಾಮೀಜಿ ಅವರ ಸಹಾಯಕನಾಗಿದ್ದ ಭದ್ರತಾ ಸಿಬ್ಬಂದಿಯಿಂದಲೇ ಕೊಲೆ ನಡೆದಿದೆ. ರವಿ (60) ಎಂಬಾತನಿಂದ ಈ ಕೃತ್ಯ ನಡೆದಿದೆ. ಶಿವಾನಂದ ಸ್ವಾಮೀಜಿಯನ್ನು ಮಾರಕಾಸ್ತ್ರದಿಂದ ಚುಚ್ಚಿ ಕೊಲೆ ಮಾಡಲಾಗಿದೆ.

ವಿಷಯ ತಿಳಿಯುತ್ತಿದ್ದಂತೆ ಸ್ಥಳಕ್ಕೆ ನಜರ್‌ಬಾದ್ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಹತ್ಯೆಗೆ ನಿಖರ ಕಾರಣವೇನು ಎಂಬುದು ತಿಳಿದು ಬಂದಿಲ್ಲ. ಮಂಚದ ಮೇಲೆ ಮಲಗಿದ್ದಲ್ಲೇ ಶಿವಾನಂದ ಸ್ವಾಮೀಜಿಗೆ ಮಾರಕಾಸ್ತ್ರದಿಂದ ಕೊಚ್ಚಿ ಕೊಲೆ ಮಾಡಲಾಗಿದೆ.

ಇದನ್ನೂ ಓದಿ: Physical Abuse : ಪಿಕ್‌ ಅಪ್, ಡ್ರಾಪ್ ನೆಪದಲ್ಲಿ ಸಲುಗೆ; ಅಂಕಲ್ ಗಾಳಕ್ಕೆ ಸಿಲುಕಿದ ಬಾಲಕಿಯ ನರಳಾಟ

ಹಾಸನದಲ್ಲಿ ಕಾರಿನಿಂದ ಗುದ್ದಿಸಿ ವ್ಯಕ್ತಿಯ ಕೊಲೆ

ಹಾಲಿನ ಡೈರಿ ವಿಚಾರದಲ್ಲಿ ಗಲಾಟೆ ಹಿನ್ನೆಲೆಯಲ್ಲಿ ಕಾರಿನಿಂದ ಗುದ್ದಿಸಿ ವ್ಯಕ್ತಿಯ ಬರ್ಬರ ಕೊಲೆ ಮಾಡಲಾಗಿದೆ. ಹಾಸನ ತಾಲೂಕಿನ ದುದ್ದ ಸಮೀಪದ ಮಾಯಸಮುದ್ರ ಗ್ರಾಮದ ಬಳಿ ಘಟನೆ ನಡೆದಿದೆ. ಉದ್ದೂರುಹಳ್ಳಿ ಗ್ರಾಮದ ನಿವಾಸಿ ಅಣ್ಣಪ್ಪ(64) ಸ್ಥಳದಲ್ಲೆ ಮೃತಪಟ್ಟರೆ, ಮಂಜುನಾಥ ಎಂಬುಬಬರಿಗೆ ಗಂಭೀರ ಗಾಯವಾಗಿದೆ.

ಉದ್ದೂರುಹಳ್ಳಿಯ ಧರ್ಮ ಹಾಗು ಆತನ ಸಂಬಂಧಿ ಚಿದಾನಂದ್ ಎಂಬಾತನಿಂದ ಕೊಲೆ ನಡೆದಿದೆ ಎನ್ನಲಾಗಿದೆ. ಹಾಲಿನ ಡೈರಿಯಲ್ಲಿ ಕೆಲಸ ಮಾಡುವ ವಿಚಾರಕ್ಕೆ ಧರ್ಮ ಹಾಗು ಮಂಜುನಾಥ ನಡುವೆ ಗಲಾಟೆ ನಡೆದಿತ್ತು. ಗಲಾಟೆಯನ್ನೇ ಮನಸ್ಸಿನಲ್ಲಿಟ್ಟುಕೊಂಡ ಆರೋಪಿಗಳು ಇನ್ನೋವಾ ಕಾರಿನಿಂದ ಗುದ್ದಿಸಿ ಕೊಂದಿದ್ದಾರೆ. ಅದೃಷ್ಟವಶಾತ್ ಅಪಾಯದಿಂದ ಮಂಜುನಾಥ ಪಾರಾಗಿದ್ದರೆ, ಅಣ್ಣಪ್ಪ ಮೃತಪಟ್ಟಿದ್ದಾರೆ.

ಹಂತಕರು ಕೊಲೆಗೈದು ಎಸ್ಕೇಪ್ ಆಗಿದ್ದು, ದುದ್ದ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಭಾನುವಾರ ರಾತ್ರಿ ಘಟನೆ ನಡೆದಿದೆ. ಗಾಯಾಳು ಮಂಜುನಾಥ್‌ನನ್ನು ಹಾಸನದ ವೈದ್ಯಕೀಯ ಆಸ್ಪತ್ರೆಗೆ ದಾಖಲು ಮಾಡಲಾಗಿದೆ. ಆರೋಪಿಗಳ ಪತ್ತೆಗಾಗಿ ಪೊಲೀಸರು ಬಲೆ ಬೀಸಿದ್ದಾರೆ.

ಈ ಸಂಗತಿಯ ಕುರಿತು ನಿಮ್ಮ ಅನಿಸಿಕೆ ಏನು? ಕಾಮೆಂಟ್ ಮೂಲಕ ತಿಳಿಸಿ

Continue Reading

ಕರ್ನಾಟಕ

Congress Guarantee: ಗ್ಯಾರಂಟಿ ನಿಲ್ಲಿಸುವ ಮಾತು ಬೇಡ: ಕೈ ನಾಯಕರಿಗೆ ಎಚ್.ಎಂ ರೇವಣ್ಣ ಎಚ್ಚರಿಕೆ

Congress Guarantee: ಲೋಕಸಭಾ ಚುನಾವಣೆಯಲ್ಲಿ ನಿರೀಕ್ಷಿತ ಸ್ಥಾನಗಳು ಬರದ ಹಿನ್ನೆಲೆಯಲ್ಲಿ ಗ್ಯಾರಂಟಿ ಯೋಜನೆಗಳನ್ನು ನಿಲ್ಲಿಸುವುದೇ ಒಳಿತು ಎಂದು ಕೆಲ ಕೈ ನಾಯಕರು ಅಭಿಪ್ರಾಯ ಹೊರಹಾಕುತ್ತಿದ್ದಾರೆ. ಹೀಗಾಗಿ ಗ್ಯಾರಂಟಿ ಅನುಷ್ಠಾನ ಸಮಿತಿ ಅಧ್ಯಕ್ಷ ಎಚ್.ಎಂ ರೇವಣ್ಣ ಪ್ರತಿಕ್ರಿಯಿಸಿದ್ದಾರೆ.

VISTARANEWS.COM


on

Congress Guaratee
Koo

ಬೆಂಗಳೂರು: ರಾಜ್ಯದಲ್ಲಿ ಗ್ಯಾರಂಟಿ ಯೋಜನೆಗಳನ್ನು (Congress Guarantee) ನಿಲ್ಲಿಸಬೇಕೆಂಬ ಚರ್ಚೆ ಹಿನ್ನೆಲೆ ಮುನ್ನೆಲೆಗೆ ಬಂದ ಹಿನ್ನೆಲೆಯಲ್ಲಿ ಗ್ಯಾರಂಟಿ ಅನುಷ್ಠಾನ ಸಮಿತಿ ಅಧ್ಯಕ್ಷ ಎಚ್.ಎಂ ರೇವಣ್ಣ (HM Revanna) ಪ್ರತಿಕ್ರಿಯಿಸಿದ್ದಾರೆ. ಗ್ಯಾರಂಟಿಗಳು ನಿಲ್ಲಿಸಿ ಎಂದು ಹೇಳಬೇಡಿ. ಎಷ್ಟೇ ದೊಡ್ಡ ನಾಯಕರು ಆದರೂ ನಿಲ್ಲಿಸುವ ಬಗ್ಗೆ ಮಾತನಾಡಬೇಡಿ. ನಾವು ಗ್ಯಾರಂಟಿಗಳನ್ನ ನಿಲ್ಲಿಸುವುದಿಲ್ಲ‌. ಸಣ್ಣ ಪುಟ್ಟ ತಪ್ಪುಗಳು ಇದ್ದರೆ ಸರಿಪಡಿಸುತ್ತೇವೆ ಎಂದು ಕೈ ನಾಯಕರಿಗೆ ಎಚ್ಚರಿಕೆ ನೀಡಿದ್ದಾರೆ.

ನಗರದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿರುವ ಅವರು, ಗ್ಯಾರಂಟಿಗಳಿಗಾಗಿ 36 ಸಾವಿರ ಕೋಟಿ ಖರ್ಚು ಆಗುತ್ತಿತ್ತು, ಅದು‌ 46 ಸಾವಿರ ಕೋಟಿಗೆ ಏರಿಕೆ ಆಗಿದೆ. ಆದರೂ ಅದು ನಮ್ಮ ಬದ್ಧತೆ. ನಾವು ಬದುಕಿಗಾಗಿ ಇದ್ದೇವೆ, ಬಿಜೆಪಿಯವರು ಭಾವನೆಗಳಿಗಾಗಿ ಇದ್ದಾರೆ ಎಂದು ತಿಳಿಸಿದ್ದಾರೆ.

ಎಲ್ಲ ಕಡೆಗಳಿಂದ ದೂರು ಬಂದಿವೆ. ಒಂದೇ ಮನೆಯಲ್ಲಿ ಇಬ್ಬರು ಫಲಾನುಭವಿಗಳ ಇರುವ ಬಗ್ಗೆ ದೂರು ಬಂದಿವೆ. ಅವುಗಳನ್ನು ಪರಿಶೀಲನೆ ಮಾಡುತ್ತೇವೆ ಎಂದು ಹೇಳಿದ್ದಾರೆ.

ಲೋಕಸಭಾ ಚುನಾವಣೆಯಲ್ಲಿ ನಿರೀಕ್ಷಿತ ಸ್ಥಾನಗಳು ಬರದ ಹಿನ್ನೆಲೆಯಲ್ಲಿ ಗ್ಯಾರಂಟಿ ಯೋಜನೆಗಳನ್ನು ನಿಲ್ಲಿಸುವುದೇ ಒಳಿತು ಎಂದು ಕೆಲ ಕೈ ನಾಯಕರು ಅಭಿಪ್ರಾಯ ಹೊರಹಾಕುತ್ತಿದ್ದಾರೆ. ಇತ್ತೀಚೆಗೆ ಮೈಸೂರು-ಕೊಡಗು ಕ್ಷೇತ್ರದ ಪರಾಜಿತ ಕೈ ಅಭ್ಯರ್ಥಿ ಎಂ.ಲಕ್ಷ್ಮಣ್‌ ಅವರು ಮತದಾರರ ವಿರುದ್ಧ ಅಸಮಾಧಾನ ಹೊರಹಾಕುತ್ತಾ, ಜನರಿಗೆ ಗ್ಯಾರಂಟಿಗಳು ಬೇಕಿಲ್ಲ, ಇದರ ಬಗ್ಗೆ ಸಿಂ ಸಿದ್ದರಾಮಯ್ಯ ಅವರು ಮರು ಪರಿಶೀಲನೆ ನಡೆಸಬೇಕು ಎಂದು ಹೇಳಿದ್ದರು. ಹೀಗಾಗಿ ಗ್ಯಾರಂಟಿ ಅನುಷ್ಠಾನ ಸಮಿತಿ ಅಧ್ಯಕ್ಷ ಎಚ್.ಎಂ ರೇವಣ್ಣ ಪ್ರತಿಕ್ರಿಯಿಸಿದ್ದಾರೆ.

ಇದನ್ನೂ ಓದಿ | Election Commission : ಜುಲೈ 10ರಂದು 7 ರಾಜ್ಯಗಳ 13 ವಿಧಾನಸಭಾ ಕ್ಷೇತ್ರಗಳಿಗೆ ಉಪಚುನಾವಣೆ

“ಒಕ್ಕೂಟ ವ್ಯವಸ್ಥೆಯ ಆಶಯ…” ಪ್ರಧಾನಿ ಮೋದಿಗೆ ಶುಭ ಕೋರಿದ ಸಿಎಂ ಸಿದ್ದರಾಮಯ್ಯ

Budget Session Siddaramaiah Narendra Modi

ಬೆಂಗಳೂರು: ಪ್ರಧಾನ ಮಂತ್ರಿಯಾಗಿ (Prime minister) ಮೂರನೇ ಬಾರಿಗೆ ಪ್ರಮಾಣ ವಚನ (Oath) ಸ್ವೀಕರಿಸಿದ ನರೇಂದ್ರ ಮೋದಿ (Narendra Modi) ಅವರಿಗೆ ಕರ್ನಾಟಕ (Karnataka) ಸಿಎಂ ಸಿದ್ದರಾಮಯ್ಯ (CM Siddaramaiah) ಸಾಮಾಜಿಕ ಜಾಲತಾಣ X ಖಾತೆ ಮೂಲಕ ಶುಭ ಕೋರಿದ್ದಾರೆ.

“3ನೇ ಬಾರಿಗೆ ದೇಶದ ಪ್ರಧಾನಿಯಾಗಿ ಪ್ರಮಾಣ ವಚನ ಸ್ವೀಕರಿಸಿದ ಪ್ರಧಾನಿ @narendramodi ಅವರಿಗೆ ಅಭಿನಂದನೆಗಳು. ಕರುನಾಡಿನ ಅಭಿವೃದ್ಧಿಯ ನಮ್ಮ ಸಂಕಲ್ಪಕ್ಕೆ ನಿಮ್ಮ ಸಹಕಾರ ಇರಲಿದೆ, ಒಕ್ಕೂಟ ವ್ಯವಸ್ಥೆಯ ಆಶಯಗಳನ್ನು ಎತ್ತಿಹಿಡಿಯುತ್ತಾ ರಾಜ್ಯಗಳ ಹಿತಾಸಕ್ತಿಯನ್ನು ನೀವು ಗೌರವಿಸುತ್ತೀರೆಂದು ಭಾವಿಸಿದ್ದೇನೆ. ಸಂಪದ್ಭರಿತ ಕರ್ನಾಟಕದ ಮೂಲಕ ಸದೃಢ ಭಾರತ ನಿರ್ಮಾಣಕ್ಕಾಗಿ ನಿಮ್ಮ ಜೊತೆಯಾಗಿ ಶ್ರಮಿಸುವ ದಿನಗಳನ್ನು ಎದುರು ನೋಡುತ್ತಿದ್ದೇನೆ” ಎಂದು ಸಿದ್ದರಾಮಯ್ಯ ಹಾರೈಸಿದ್ದಾರೆ.

Continue Reading

ಮೈಸೂರು

Physical Abuse : ಪಿಕ್‌ ಅಪ್, ಡ್ರಾಪ್ ನೆಪದಲ್ಲಿ ಸಲುಗೆ; ಅಂಕಲ್ ಗಾಳಕ್ಕೆ ಸಿಲುಕಿದ ಬಾಲಕಿಯ ನರಳಾಟ

Physical Abuse : ನಿನ್ನ ತಾತ ನನಗೆ ಪರಿಚಯ ಎಂದು ಹೇಳಿ ಆರೋಪಿ ಲೋಕೇಶ್‌ ಬಾಲಕಿಯ ಜತೆಗೆ ಸಲುಗೆ ಬೆಳೆಸಿದ್ದ ಎನ್ನಲಾಗಿದೆ. ಖಾಸಗಿ ವಿಡಿಯೋ ಮಾಡಿಕೊಂಡು ಬ್ಲ್ಯಾಕ್‌ಮೇಲ್ ಮಾಡಿ ಕರೆದಾಗ ಬರುವಂತೆ ಟಾರ್ಚರ್‌ ಕೊಟ್ಟಿದ್ದ ಎನ್ನಲಾಗಿದೆ.

VISTARANEWS.COM


on

By

Physical Abuse
ಬಾಲಕಿ ರಿಷಿತಾ ಹಾಗೂ ಆರೋಪಿ ಲೋಕೇಶ್‌
Koo

ಮೈಸೂರು: ಮರ್ಯಾದೆಗೆ ಅಂಜಿ ಒಂದೇ ಕುಟುಂಬದ ನಾಲ್ವರು ಆತ್ಮಹತ್ಯೆ (Self harming) ಯತ್ನ ಪ್ರಕರಣಕ್ಕೆ ಸಂಬಂಧಿಸಿದಂತೆ ಆರೋಪಿ ಲೋಕೇಶ್‌ ಪಿಕ್‌ ಅಪ್‌ ಡ್ರಾಪ್‌ ಮಾಡುವ ನೆಪದಲ್ಲಿ ಪರಿಚಯ ಮಾಡಿಕೊಂಡಿದ್ದ ಎನ್ನಲಾಗಿದೆ. ಬೈಕ್‌ನಲ್ಲಿ ಬಂದ ಹೆಣ್ಣು ಬಾಕನ ಬಲೆಗೆ ಪಿಯುಸಿ ಓದುತ್ತಿದ್ದ ರಿಷಿತಾ ಬಿದ್ದಿದ್ದಳು. ಅಂಕಲ್ ಗಾಳಕ್ಕೆ ಸಿಲುಕಿದ (Physical Abuse) ಬಾಲಕಿಯ ಕುಟುಂಬವು ಮಾನ ಮರ್ಯಾದೆಗೆ ಹೆದರಿ ನಾಶವಾಗಿದೆ. ರಿಷಿತಾ ಕೆಆರ್‌ ನಗರದ ಕಾಲೇಜಿನಲ್ಲಿ ಪ್ರಥಮ ಪಿಯುಸಿ ವ್ಯಾಸಂಗ ಮಾಡುತ್ತಿದ್ದಳು. ಕಾಲೇಜಿಗೆ ಹೋಗಿ ಬರುವಾಗ ಲೋಕೇಶ್‌ ಪರಿಚಯವಾಗಿದ್ದ. ರಿಷಿತಾಳಿಗೆ ನಿನ್ನ ತಾತ ನನಗೆ ಗೊತ್ತಿರುವವರು ಎಂದು ಪರಿಚಯ ಮಾಡಿಕೊಂಡು ಊರಿಗೆ ಡ್ರಾಪ್ ಮಾಡುತ್ತಲೇ ಸಲುಗೆ ಬೆಳೆಸಿಕೊಂಡಿದ್ದ.

ಈ ವೇಳೆ ಖಾಸಗಿ ವಿಡಿಯೋ ಮಾಡಿಕೊಂಡು ಬ್ಲ್ಯಾಕ್‌ಮೇಲ್ ಮಾಡಿ ಕರೆದಾಗ ಬರುವಂತೆ ಟಾರ್ಚರ್‌ ಕೊಟ್ಟಿದ್ದ ಎನ್ನಲಾಗಿದೆ. ಒಂದು ದಿನ ಕಾರಿನಲ್ಲಿ ಬಂದು ಅಡ್ಡಗಟ್ಟಿ ಬಾಲಕಿಗೆ ಬೆದರಿಕೆ ಹಾಕಿದ್ದ. ಈ ವೇಳೆ ಆರೋಪಿಯಿಂದ ಮೊಬೈಲ್ ಕಸಿದುಕೊಂಡು ಕಲ್ಲಿನಿಂದ ಜಜ್ಜಿ ಹಾಕಿದ್ದಳು.

ಬಳಿಕ ನಿನ್ನ ಮೊಮ್ಮಗಳು ನನ್ನ ಮೊಬೈಲ್ ಒಡೆದು ಹಾಕಿದ್ದಾಳೆ ಎಂದು ಮನೆ ಬಾಗಿಲಿಗೆ ಬಂದು ಆರೋಪಿ ಲೋಕೇಶ್‌ ಗಲಾಟೆ ಮಾಡಿದ್ದ. ಬಳಿಕ ಎಲ್ಲವನ್ನೂ ವಿಚಾರಿಸಿದಾಗ ಮನನೊಂದ ಕುಟುಂಬಸ್ಥರು ಪೊಲೀಸ್ ಠಾಣೆಗೆ ದೂರು ನೀಡಿದರು. ಆದರೆ ಪೊಲೀಸರು ಯಾವುದೇ ದೂರು ದಾಖಲಿಸಿಕೊಳ್ಳದೆ ನಿರ್ಲಕ್ಷ್ಯ ತೋರಿದ್ದಕ್ಕೆ ನ್ಯಾಯ ಸಿಗಲ್ಲ ಎಂದು ಭಾವಿಸಿ ಆತ್ಮಹತ್ಯೆಗೆ ಯತ್ನಿಸಿದ್ದಾರೆ.

ಇದನ್ನೂ ಓದಿ: Physical Abuse : ನಗ್ನ ಫೋಟೋ ತೋರಿಸಿ ಬ್ಲ್ಯಾಕ್‌ಮೇಲ್‌; ಮರ್ಯಾದೆಗೆ ಅಂಜಿದ ತಂದೆ ಬಳಿಕ ಮಗಳು ಮೃತ್ಯು, ಮತ್ತಿಬ್ಬರ ಸ್ಥಿತಿ ಗಂಭೀರ

ಮೃತರ ಕುಟುಂಬಸ್ಥರಿಗೆ ಮಾಜಿ ಸಚಿವ ಸಾ.ರಾ.ಮಹೇಶ್ ಸಾಂತ್ವನ

ಒಂದೇ ಕುಟುಂಬದ ನಾಲ್ವರು ಆತ್ಮಹತ್ಯೆ ಯತ್ನ ಪ್ರಕರಣಕ್ಕೆ ಸಂಬಂಧಿಸಿದಂತೆ ಮೃತರ ನಿವಾಸಕ್ಕೆ ಮಾಜಿ ಸಚಿವ ಸಾ.ರಾ.ಮಹೇಶ್ ಭೇಟಿ ನೀಡಿದರು. ಮೃತ ಕುಟುಂಬದ ಸದಸ್ಯರ ಜತೆ ಮಾತುಕತೆ ನಡೆಸಿದರು. ಮೃತ ಮಹದೇವನಾಯ್ಕ ಪುತ್ರ ಮಂಜುಗೆ ಸಾಂತ್ವನ ಹೇಳಿದರು.

ನಾಲ್ವರಲ್ಲಿ ಅಪ್ರಾಪ್ತೆಯ ತಾತ ಮತ್ತು ತಾಯಿ ಮೃತಪಟ್ಟರೆ, ಬಾಲಕಿ ಹಾಗೂ ಅಜ್ಜಿಗೆ ಚಿಕಿತ್ಸೆ ಮುಂದುವರಿದಿದೆ. ಇತ್ತ ಗ್ರಾಮಸ್ಥರು ಹಾಗೂ ಕುಟುಂಬಸ್ಥರು ಗ್ರಾಮದಲ್ಲೇ ಮೃತದೇಹ ಇಟ್ಟುಕೊಂಡಿದ್ದಾರೆ. ದೂರು ಕೊಟ್ಟರೂ ಪ್ರಕರಣ ದಾಖಲಿಸದ ಹಿನ್ನೆಲೆಯಲ್ಲಿ ಪೊಲೀಸರ ವಿರುದ್ಧ ಪ್ರಕರಣ ದಾಖಲಾಗಬೇಕು ಹಾಗೂ ಮೃತ ಕುಟುಂಬಸ್ಥರಿಗೆ ಸೂಕ್ತ ಪರಿಹಾರಕ್ಕೆ ಒತ್ತಾಯಿಸಿದರು. ಮೃತಪಟ್ಟು ಎರಡು ದಿನವಾದರೂ ಇನ್ನು ಅಂತ್ಯಕ್ರಿಯೆ ಮಾಡಿಲ್ಲ.

ತಂದೆ ಬಳಿಕ ಮಗಳು ಮೃತ್ಯು

ಮಲೆಮಹದೇಶ್ವರ ಬೆಟ್ಟದಲ್ಲಿ (MM Hills) ಒಂದೇ ಕುಟುಂಬದ ನಾಲ್ವರು ಆತ್ಮಹತ್ಯೆ (Self Harming) ಯತ್ನಿಸಿದ ಪ್ರಕರಣಕ್ಕೆ (Physical Abuse) ಸಂಬಂಧಿಸಿದ್ದಂತೆ ಮೊನ್ನೆ ಶನಿವಾರ ತಂದೆ ಮಹಾದೇವನಾಯಕ (65) ಮೃತಪಟ್ಟಿದ್ದರು. ಇಂದು ಸೋಮವಾರ (ಜೂ.10) ಚಿಕಿತ್ಸೆ ಫಲಕಾರಿಯಾಗದೆ ಅವರ ಮಗಳು ಲೀಲಾವತಿ (45 ) ಮೃತಪಟ್ಟಿದ್ದಾರೆ. ಲೀಲಾವತಿಗೆ ಮೂರು ದಿನಗಳಿಂದ ಚಾಮರಾಜನಗರ ಸಿಮ್ಸ್ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದರು. ಆದರೆ ಕ್ರಿಮಿ ನಾಶಕ ಸೇವಿಸಿದ ತೀವ್ರತೆಗೆ ಮೃತಪಟ್ಟಿದ್ದಾರೆ.

ಲೀಲಾವತಿ ಅವರ ಮಗಳು ರಿಷೀತಾಳ ನಗ್ನ ಫೋಟೊ ತೋರಿಸಿ ಕಾಮುಕನೊಬ್ಬ ಬ್ಲ್ಯಾಕ್‌ಮೇಲ್‌ ಮಾಡುತ್ತಿದ್ದ. ಇದೇ ಕಾರಣಕ್ಕೆ ಮರ್ಯಾದೆಗೆ ಅಂಜಿ ಒಂದೇ ಕುಟುಂಬದ ನಾಲ್ವರು ವಿಷ ಸೇವಿಸಿ ಆತ್ಮಹತ್ಯೆಗೆ ಯತ್ನಿಸಿದ್ದರು. ಘಟನೆಯಲ್ಲಿ ತಂದೆ-ಮಗಳು ಮೃತಪಟ್ಟರೆ, ಅಜ್ಜಿ- ಮೊಮ್ಮಗಳ ಸ್ಥಿತಿ ಗಂಭೀರವಾಗಿದ್ದು, ಇಬ್ಬರಿಗೂ ಚಾಮರಾಜನಗರ ಸಿಮ್ಸ್ ಆಸ್ಪತ್ರೆಯಲ್ಲಿ ಚಿಕಿತ್ಸೆ ಮುಂದುವರಿದಿದೆ.

ಬಾಲಕಿಯ ಡೆತ್‌ನೋಟ್‌ ಪತ್ತೆ

ಮಹಾದೇವನಾಯಕ ಹಾಗೂ ಗೌರಮ್ಮ ದಂಪತಿಯ ಮಗಳು ಲೀಲಾವತಿ ಹಾಗೂ ಈಕೆ ಮಗಳು ರಿಷಿತಾ ಈ ನಾಲ್ವರು ಆತ್ಮಹತ್ಯೆಗೂ ಮುನ್ನ ಡೆತ್‌ನೋಟ್‌ ಬರೆದಿಟ್ಟಿದ್ದಾರೆ. ಕಾಮ ಕ್ರಿಮಿ ಲೋಕೇಶ್ ಕೊಟ್ಟ ಟಾರ್ಚರ್‌ಗೆ ಬೇಸತ್ತು ಇಡೀ ಕುಟುಂಬ ಕ್ರಿಮಿ ನಾಶಕ ಸೇವಿಸಿದ್ದರು. ಅಪ್ರಾಪ್ತೆ ಬರೆದಿಟ್ಟ ಡೆತ್‌ನೋಟ್ ವಿಸ್ತಾರ ನ್ಯೂಸ್‌ಗೆ ಲಭ್ಯವಾಗಿದೆ.

Physical abuse lokesh
ಆರೋಪಿ ಲೋಕೇಶ್‌

ಡೆತ್‌ನೋಟ್‌ನಲ್ಲಿ ಆರೋಪಿ ಲೋಕೇಶ್‌ ಕೊಟ್ಟ ಹಿಂಸೆಯನ್ನು ಎಳೆ ಎಳೆಯಾಗಿ ಬರೆದಿಟ್ಟಿದ್ದಾಳೆ. ಲೋಕೇಶ್ ಎಲ್ಲಾ ಹೆಣ್ಣು ಮಕ್ಕಳನ್ನು ಕೆಟ್ಟ ದೃಷ್ಠಿಯಿಂದ ನೋಡುತ್ತಾನೆ. ನನ್ನನ್ನು ಸಹ ಲೋಕೇಶ್ ಕೆಟ್ಟ ದೃಷ್ಠಿಯಿಂದ ನೋಡಿದ್ದ. ನಮ್ಮ ಕುಟುಂಬದ ಮಾನ ಮರ್ಯಾದೆ ಕಳೆದು ಹಾಕಿದ್ದಾನೆ. ಲೋಕೇಶ್‌ನನ್ನು ಸುಮ್ಮನೆ ಬಿಡಬೇಡಿ, ಆತನನ್ನ ಸುಮ್ಮನೆ ಬಿಟ್ಟರೆ ನನ್ನಂತ ಎಷ್ಟೋ ಹೆಣ್ಣು ಮಕ್ಕಳ ಜೀವ ಹಾಳಾಗುತ್ತೆ ಎಂದು ತನಗೆ ಆದ ಅಪಮಾನ ಹಾಗೂ ಮಾನಸಿಕ ಹಿಂಸೆಯ ಕುರಿತು ಬರೆದಿಟ್ಟಿದ್ದಾಳೆ.

ಶವವಿಟ್ಟು ಗ್ರಾಮಸ್ಥರ ಪ್ರತಿಭಟನೆ

ಈ ವಿಷಯ ತಿಳಿಯುತ್ತಿದ್ದ ಆಕ್ರೋಶಗೊಂಡ ಚಂದಗಾಲು ಗ್ರಾಮಸ್ಥರು ಮಹದೇವನಾಯಕರ ಮೃತದೇಹವನ್ನು ರಸ್ತೆಯಲ್ಲಿಟ್ಟು ಪ್ರತಿಭಟನೆ ನಡೆಸಿದರು. ಕೆ.ಆರ್.ನಗರ ಮುಖ್ಯರಸ್ತೆಯಲ್ಲಿ ಶವ ಇಟ್ಟು ಪ್ರತಿಭಟಿಸಿ, ಆರೋಪಿಗೆ ಉಗ್ರ ಶಿಕ್ಷೆ ಕೊಡಬೇಕೆಂದು ಆಗ್ರಹಿಸಿದರು. ನಿರ್ಲಕ್ಷ್ಯ ವಹಿಸಿದ ಪೊಲೀಸರ ಮೇಲೂ ಕಠಿಣ ಕ್ರಮ ಆಗಬೇಕೆಂದರು. ರಸ್ತೆ ತಡೆಯಿಂದಾಗಿ ಕೆಲಕಾಲ ಸಂಚಾರ ಅಸ್ತವ್ಯಸ್ತವಾಗಿತ್ತು.

ಈ ಸಂಗತಿಯ ಕುರಿತು ನಿಮ್ಮ ಅನಿಸಿಕೆ ಏನು? ಕಾಮೆಂಟ್ ಮೂಲಕ ತಿಳಿಸಿ

Continue Reading

ಪ್ರಮುಖ ಸುದ್ದಿ

Prajwal Revanna Case: ಎಸ್‌ಐಟಿಯಿಂದ ಪ್ರಜ್ವಲ್‌ ರೇವಣ್ಣ ಕೋಣೆ ತಲಾಶ್‌, ಭವಾನಿ ತುಳಸಿ ಪೂಜೆ! ಅಲ್ಲೇ ಇದ್ದರೂ ಮುಖಾಮುಖಿಯಾಗದ ಅಮ್ಮ- ಮಗ

Prajwal Revanna Case: ಪ್ರಜ್ವಲ್‌ ಮನೆಯಲ್ಲಿ ತನ್ನನ್ನು ಲೈಂಗಿಕವಾಗಿ ಕಿರುಕುಳಕ್ಕೆ ಒಳಪಡಿಸಲಾಗಿದೆ ಎಂದು ಸಂತ್ರಸ್ತೆ ತೋರಿಸಿದ ಕೊಠಡಿ ಮಹಜರು ಮಾಡಲಾಗಿದೆ. ಈ ಸಂದರ್ಭದಲ್ಲಿ ಭವಾನಿ ಅವರು ತುಳಸಿ ಕಟ್ಟೆಗೆ ಪೂಜೆ ಮಾಡುತ್ತಿರುವುದು ಕಂಡುಬಂತು.

VISTARANEWS.COM


on

bhavani revanna prajwal revanna case
Koo

ಬೆಂಗಳೂರು: ಲೈಂಗಿಕ ದೌರ್ಜನ್ಯ (Physical Abuse) ಪ್ರಕರಣದಲ್ಲಿ ಎಸ್‌ಐಟಿಯಿಂದ (SIT) ತನಿಖೆಗೆ ಒಳಗಾಗಿರುವ ಪ್ರಜ್ವಲ್‌ ರೇವಣ್ಣ (Prajwal Revanna Case) ಅವರ ಮನೆಯನ್ನು ಇಂದು ಮತ್ತೊಮ್ಮೆ ಮಹಜರು ಮಾಡಲಾಗಿದೆ. ಇದೇ ಸಂದರ್ಭದಲ್ಲಿ ತಾಯಿ ಭವಾನಿ ರೇವಣ್ಣ (Bhavani Revanna) ಅದೇ ಮನೆಯಲ್ಲೇ ಇದ್ದರೂ ಮಗನಿಗೆ ಮುಖಾಮುಖಿ ಆಗಲಿಲ್ಲ ಎಂದು ತಿಳಿದುಬಂದಿದೆ.

ಪ್ರಜ್ವಲ್ ರೇವಣ್ಣನನ್ನು ಎಸ್ಐಟಿ ಅಧಿಕಾರಿಗಳು ಇಂದು ಮಹಜರ್‌ಗೆ ಕರೆದೊಯ್ದರು. ಇಂದು ಪ್ರಜ್ವಲ್‌ನನ್ನು ನ್ಯಾಯಾಲಯಕ್ಕೆ ಹಾಜರು ಮಾಡುವ ಮುನ್ನ ಬೆಂಗಳೂರಿನ ಬಸವನಗುಡಿಯ ನಿವಾಸದಲ್ಲಿ ಮಹಜರ್ ಪ್ರಕ್ರಿಯೆ ನಡೆಸಿದರು. ಸ್ಥಳದಲ್ಲಿ ಬಿಗಿ ಭದ್ರತೆ ಒದಗಿಸಲಾಗಿತ್ತು. ಈ ಸಂದರ್ಭದಲ್ಲಿ ಪ್ರಜ್ವಲ್‌ ತಾಯಿ ಭವಾನಿ ರೇವಣ್ಣ ಅಸೌಖ್ಯದ ಕಾರಣ ಹೇಳಿ ಮನೆಯಲ್ಲೇ ಇದ್ದರು. ಆದರೆ ಪ್ರಜ್ವಲ್‌ಗೆ ಮುಖಾಮುಖಿಯಾಗಲಿಲ್ಲ.

ಈ ಮುನ್ನವೇ ಸ್ಥಳ ಮಹಜರು ಮಾಡುವ ವೇಳೆ ಅಡ್ಡಿಪಡಿಸದಂತೆ ಭವಾನಿ ಅವರಿಗೆ ಸೂಚನೆ ನೀಡಲಾಗಿತ್ತು ಎನ್ನಲಾಗಿದೆ. ಭವಾನಿ ಅವರು ಕೂಡ ಸಂತ್ರಸ್ತ ಮಹಿಳೆಯ ಕಿಡ್ನಾಪ್‌ ಕೇಸ್‌ನಲ್ಲಿ ಎಸ್‌ಐಟಿ ತನಿಖೆಗೆ ಒಳಗಾಗುತ್ತಿದ್ದಾರೆ. ಕೋರ್ಟ್‌ ಭವಾನಿಗೆ ಮಧ್ಯಂತರ ಜಾಮೀನು ನೀಡಿದ್ದು, ಸಂಜೆಯ ಒಳಗೆ ತನಿಖೆ ಮುಗಿಸಿ ಕಳಿಸುವಂತೆ ಎಸ್‌ಐಟಿಗೆ ನಿರ್ದೇಶನ ನೀಡಿದೆ.

ಪ್ರಜ್ವಲ್‌ ಮನೆಯಲ್ಲಿ ತನ್ನನ್ನು ಲೈಂಗಿಕವಾಗಿ ಕಿರುಕುಳಕ್ಕೆ ಒಳಪಡಿಸಲಾಗಿದೆ ಎಂದು ಸಂತ್ರಸ್ತೆ ತೋರಿಸಿದ ಕೊಠಡಿ ಮಹಜರು ಮಾಡಲಾಗಿದೆ. ಈ ಸಂದರ್ಭದಲ್ಲಿ ಭವಾನಿ ಅವರು ತುಳಸಿ ಕಟ್ಟೆಗೆ ಪೂಜೆ ಮಾಡುತ್ತಿರುವುದು ಕಂಡುಬಂತು. ಕೈಯಲ್ಲಿ ಊರುಗೋಲು ಹಿಡಿದುಕೊಂಡು ಬಂದ ಭವಾನಿ ರೇವಣ್ಣ, ಮೊದಲ ಮಹಡಿಯಲ್ಲಿರುವ ತುಳಸಿ‌ಕಟ್ಟೆಗೆ ಪೂಜೆ ಸಲ್ಲಿಸಿದರು. ಅನಾರೋಗ್ಯದ ಹಿನ್ನೆಲೆಯಲ್ಲಿ ಅವರು ವಾಕಿಂಗ್ ಸ್ಟಿಕ್ ಹಿಡಿದುಕೊಂಡು ಓಡಾಡುತ್ತಿದ್ದಾರೆ ಎನ್ನಲಾಗಿದೆ.

ಅಶ್ಲೀಲ ವಿಡಿಯೋದಲ್ಲಿ ತಾನಿರುವುದನ್ನು ಪ್ರಜ್ವಲ್‌ ಒಪ್ಪಿಕೊಂಡಿಲ್ಲ. ಹೀಗಾಗಿ, ಅಶ್ಲೀಲ ವಿಡಿಯೋದಲ್ಲಿ ಕಾಣಿಸುವ ಜಾಗಕ್ಕೂ ಬಸವನಗುಡಿ ಮನೆಯ ಕೋಣೆಗೂ ತಾಳೆ ಆಗ್ತಿದೆಯಾ ಎಂದು ಪರಿಶೀಲನೆ ನಡೆಸಲಾಗುತ್ತಿದೆ. ವೈರಲ್ ಆಗಿರುವ ವಿಡಿಯೋದಲ್ಲಿ ಎಲ್ಲೂ ಪ್ರಜ್ವಲ್ ಮುಖ ಕಾಣಿಸುತ್ತಿಲ್ಲ. ಹಾಗಾಗಿ ಮನೆಯ ಕೆಲ ಜಾಗಗಳನ್ನು ಎವಿಡೆನ್ಸ್ ಆಗಿ ಅಧಿಕಾರಿಗಳು ಪರಿಗಣಿಸಲಿದ್ದಾರೆ. ಸಂತ್ರಸ್ತೆ ದೂರಿನಲ್ಲಿ ಉಲ್ಲೇಖ ಮಾಡಿರುವ ಜಾಗ ಹಾಗೂ ಅಶ್ಲೀಲ ವಿಡಿಯೋದಲ್ಲಿರುವ ಜಾಗಗಳು ಮ್ಯಾಚ್‌ ಆದರೆ ಪ್ರಜ್ವಲ್‌ ಲಾಕ್‌ ಆದಂತೆಯೇ.

ಇನ್ನೊಂದೆಡೆ ವಿಡಿಯೋ ಮಾಡಿಕೊಂಡ ಮದರ್ ಡಿವೈಸ್‌ಗಾಗಿ ಎಸ್‌ಐಟಿ ಹುಡುಕಾಟ ನಡೆಸಿದೆ. ಈ ಮೂಲ ಮೊಬೈಲ್‌ ಕಳೆದುಹೋಗಿದೆ. ಒಂದು ವರ್ಷದ ಹಿಂದೆಯೇ ಈ ಬಗ್ಗೆ ಹೊಳೆನರಸೀಪುರ ಪೊಲೀಸ್‌ ಠಾಣೆಯಲ್ಲಿ ದೂರು ನೀಡಿರುವುದಾಗಿ ಪ್ರಜ್ವಲ್‌ ಹೇಳಿದ್ದಾರೆ.

ಪರಾರಿಯಾಗಲು ಸಹಾಯ; ಪ್ರಜ್ವಲ್ ರೇವಣ್ಣ ಗರ್ಲ್ ಫ್ರೆಂಡ್‌ಗೆ ಎಸ್‌ಐಟಿ ನೊಟೀಸ್!

ಬೆಂಗಳೂರು: ಅತ್ಯಾಚಾರ, ಲೈಂಗಿಕ ದೌರ್ಜನ್ಯ ಪ್ರಕರಣದ ಆರೋಪಿ ಮಾಜಿ ಸಂಸದ ಪ್ರಜ್ವಲ್‌ ರೇವಣ್ಣ ವಿದೇಶದಲ್ಲಿ ತಲೆ ಮರೆಸಿಕೊಳ್ಳಲು ಹಣ ಸಹಾಯ ಮಾಡಿದ ಆರೋಪದಡಿ ಪ್ರಜ್ವಲ್‌ ಗರ್ಲ್ ಫ್ರೆಂಡ್‌ಗೆ ಎಸ್‌ಐಟಿ ನೊಟೀಸ್ ನೀಡಿದೆ. ಸಹಾಯ ಮಾಡುವ ಜತೆಗೆ ಇಲ್ಲಿನ ವಿದ್ಯಾಮಾನಗಳನ್ನು ಗರ್ಲ್ ಫ್ರೆಂಡ್ ಅಪ್ ಡೇಟ್ ಮಾಡುತ್ತಿದ್ದಳು ಎನ್ನಲಾಗಿದೆ. ಹೀಗಾಗಿ ವಿಚಾರಣೆಗೆ ಹಾಜರಾಗುವಂತೆ ಪ್ರಜ್ವಲ್‌ ಗರ್ಲ್ ಫ್ರೆಂಡ್‌ಗೆ ನೋಟಿಸ್‌ ಜಾರಿ ಮಾಡಲಾಗಿದೆ.

ಹಲವು ಬಾರಿ ನೋಟಿಸ್ ನೀಡಿದ್ದರೂ ಪ್ರಜ್ವಲ್‌ ರೇವಣ್ಣ ವಿಚಾರಣೆಗೆ ಬಂದಿರಲಿಲ್ಲ. ಆರ್ಥಿಕವಾಗಿ ಕಟ್ಟಿ ಹಾಕಲು ಅವರ ಬ್ಯಾಂಕ್ ಅಕೌಂಟ್‌ಗಳನ್ನು ಸೀಜ್‌ ಮಾಡಲು ಎಸ್ಐಟಿ ಮುಂದಾಗಿತ್ತು. ತನಿಖೆ ವೇಳೆ ಪ್ರಜ್ವಲ್‌ಗೆ ಹಣ ವರ್ಗಾವಣೆ ಮಾಡಿದ ಅಕೌಂಟ್‌ಗಳ ಮೇಲೆಯೂ ನಿಗಾ ಇಡಲಾಗಿತ್ತು. ಆದರೆ ಪ್ರಜ್ವಲ್‌ಗೆ ಗರ್ಲ್ ಫ್ರೆಂಡ್ ಹಣ ಸಹಾಯ ಮಾಡಿರುವುದು, ಆಶ್ರಯ ಕಲ್ಪಿಸಿರುವ ಬಗ್ಗೆ ಮಹತ್ವದ ಸಾಕ್ಷ್ಯ ಲಭ್ಯವಾಗಿದ್ದರಿಂದ ನೋಟಿಸ್‌ ನೀಡಲಾಗಿದೆ.

ಇದನ್ನೂ ಓದಿ: Prajwal Revanna Case: ಪೆನ್ ಡ್ರೈವ್ ಹಂಚಿಕೆ ಪ್ರಕರಣದ ಆರೋಪಿ ಕಾರ್ತಿಕ್ ಗೌಡ ಬಂಧನ

Continue Reading
Advertisement
murder case
ಮೈಸೂರು10 mins ago

Murder Case : ಮೈಸೂರಿನಲ್ಲಿ ಅನ್ನದಾನೇಶ್ವರ ಮಠದ ಹಿರಿಯ ಸ್ವಾಮೀಜಿಯ ಬರ್ಬರ ಕೊಲೆ

pm narendra modi leopord
ಪ್ರಮುಖ ಸುದ್ದಿ10 mins ago

PM Narendra Modi: ಮೋದಿ ಪ್ರಮಾಣ ವಚನ ಸಮಾರಂಭದಲ್ಲಿ ಕಾಣಿಸಿಕೊಂಡ ನಿಗೂಢ ಪ್ರಾಣಿ! ವಿಡಿಯೋ ಇದೆ ನೋಡಿ

Yuva Rajkumar son of raghavendra Rajkumar yuva divorce
ಸ್ಯಾಂಡಲ್ ವುಡ್16 mins ago

Yuva Rajkumar: ವಿಚ್ಛೇದನಕ್ಕೆ ಅರ್ಜಿ ಸಲ್ಲಿಸಿದ ಯುವ ರಾಜ್​ಕುಮಾರ್​ ; ಅಣ್ಣಾವ್ರ ಕುಟುಂಬದಲ್ಲಿ ಇದೇ ಮೊದಲ ಪ್ರಕರಣ!

Congress Guaratee
ಕರ್ನಾಟಕ25 mins ago

Congress Guarantee: ಗ್ಯಾರಂಟಿ ನಿಲ್ಲಿಸುವ ಮಾತು ಬೇಡ: ಕೈ ನಾಯಕರಿಗೆ ಎಚ್.ಎಂ ರೇವಣ್ಣ ಎಚ್ಚರಿಕೆ

Suresh Gopi
ದೇಶ26 mins ago

Suresh Gopi : ಪ್ರಮಾಣವಚನ ಸ್ವೀಕರಿಸಿದ ಒಂದೇ ಗಂಟೆಯೊಳಗೆ ಸಚಿವ ಸ್ಥಾನ ಬೇಡ ಎಂದ ಸುರೇಶ್​ ಗೋಪಿ!

Physical Abuse
ಮೈಸೂರು45 mins ago

Physical Abuse : ಪಿಕ್‌ ಅಪ್, ಡ್ರಾಪ್ ನೆಪದಲ್ಲಿ ಸಲುಗೆ; ಅಂಕಲ್ ಗಾಳಕ್ಕೆ ಸಿಲುಕಿದ ಬಾಲಕಿಯ ನರಳಾಟ

Election Commission
ಪ್ರಮುಖ ಸುದ್ದಿ50 mins ago

Election Commission : ಜುಲೈ 10ರಂದು 7 ರಾಜ್ಯಗಳ 13 ವಿಧಾನಸಭಾ ಕ್ಷೇತ್ರಗಳಿಗೆ ಉಪಚುನಾವಣೆ

bhavani revanna prajwal revanna case
ಪ್ರಮುಖ ಸುದ್ದಿ52 mins ago

Prajwal Revanna Case: ಎಸ್‌ಐಟಿಯಿಂದ ಪ್ರಜ್ವಲ್‌ ರೇವಣ್ಣ ಕೋಣೆ ತಲಾಶ್‌, ಭವಾನಿ ತುಳಸಿ ಪೂಜೆ! ಅಲ್ಲೇ ಇದ್ದರೂ ಮುಖಾಮುಖಿಯಾಗದ ಅಮ್ಮ- ಮಗ

Niveditha Gowda Chandan Shetty Joint Pressmeet For The First Time
ಕಿರುತೆರೆ1 hour ago

Niveditha Gowda : ಡಿವೋರ್ಸ್‌ ಬಳಿಕ ಒಟ್ಟಾಗಿ ಸುದ್ದಿಗೋಷ್ಠಿ ಕರೆದ ಚಂದನ್-ನಿವೇದಿತಾ!

Narendra Modi 3.0
ಪ್ರಮುಖ ಸುದ್ದಿ1 hour ago

Narendra Modi 3.0 : ಅಧಿಕಾರ ಸ್ವೀಕರಿಸಿದ ಮರುದಿನವೇ ಮೊದಲ ಫೈಲ್​ಗೆ ಸಹಿ ಹಾಕಿದ ಪ್ರಧಾನಿ ಮೋದಿ; ಯಾವ ಕಡತ ಅದು?

Sharmitha Gowda in bikini
ಕಿರುತೆರೆ8 months ago

Geetha Serial Kannada: ನಿದ್ದೆ ಕದ್ದ ಚೋರಿ! ನಟಿ `ಭಾನುಮತಿ’ ಹಾಟ್‌ ಪೋಟೊಗಳಿಗೆ ಫ್ಯಾನ್ಸ್ ಫುಲ್ ಫಿದಾ

Kannada Serials
ಕಿರುತೆರೆ8 months ago

Kannada Serials TRP: 2ನೇ ಸ್ಥಾನದಲ್ಲಿ 2 ಧಾರಾವಾಹಿಗಳು; ಟಿಆರ್‌ಪಿ ರೇಸ್‌ನಲ್ಲಿಲ್ಲ ಭಾಗ್ಯಲಕ್ಷ್ಮೀ!

Bigg Boss- Saregamapa 20 average TRP
ಕಿರುತೆರೆ8 months ago

Kannada Serials TRP: ಏಳನೇ ಸ್ಥಾನಕ್ಕೆ ʻಅಮೃತಧಾರೆʼ ಕುಸಿತ; ಬಿಗ್‌ ಬಾಸ್‌-ಸರಿಗಮಪ ಟಿಆರ್‌ಪಿ ಎಷ್ಟು?

galipata neetu
ಕಿರುತೆರೆ6 months ago

Kanyadana Serial: ಕಿರುತೆರೆಗೆ ಮತ್ತೆ ಎಂಟ್ರಿ ಕೊಟ್ಟ ʻಗಾಳಿಪಟʼ ಖ್ಯಾತಿಯ ʻನೀತುʼ!

Kannada Serials
ಕಿರುತೆರೆ9 months ago

Kannada Serials TRP: ನಾಲ್ಕನೇ ಸ್ಥಾನಕ್ಕೆ ಕುಸಿತ ಕಂಡ ʻಸೀತಾ ರಾಮʼ; ಟಿಆರ್‌ಪಿ ರೇಸ್‌ಗೆ ʻಭಾಗ್ಯಲಕ್ಷ್ಮಿʼ ಬ್ಯಾಕ್‌!

Kannada Serials
ಕಿರುತೆರೆ8 months ago

Kannada Serials TRP: ಟಿಆರ್‌ಪಿಯಲ್ಲಿ ʻಭಾಗ್ಯಲಕ್ಷ್ಮೀʼ ಹವಾ; ʻಪುಟ್ಟಕ್ಕನ ಮಕ್ಕಳುʼ ಧಾರಾವಾಹಿಗೆ ಸಂಕಷ್ಟ!

Bigg Boss' dominates TRP; Sita Rama fell to the sixth position
ಕಿರುತೆರೆ8 months ago

Kannada Serials TRP: ಟಿಆರ್‌ಪಿಯಲ್ಲಿ ʻಬಿಗ್ ಬಾಸ್ʼದೇ ಮೇಲುಗೈ; 6ನೇ ಸ್ಥಾನಕ್ಕೆ ಕುಸಿದ ʻಸೀತಾ ರಾಮʼ

geetha serial Dhanush gowda engagement
ಕಿರುತೆರೆ6 months ago

Dhanush Gowda: ಗೀತಾ ಧಾರಾವಾಹಿ ನಟನ ನಿಶ್ಚಿತಾರ್ಥ; ಭವ್ಯಾಳ ಕಮೆಂಟ್‌ ಬಾಕ್ಸ್‌ ಆಫ್‌!

varun
ಕಿರುತೆರೆ7 months ago

Brindavana Serial: ʼಬೃಂದಾವನʼ ಧಾರಾವಾಹಿಯಲ್ಲಿ ದೊಡ್ಡ ಟ್ವಿಸ್ಟ್‌; ಪ್ರಮುಖ ಪಾತ್ರಧಾರಿಯೇ ಬದಲು

Kannada Serials
ಕಿರುತೆರೆ9 months ago

Kannada Serials TRP: ಟಿಆರ್‌ಪಿಯಲ್ಲಿ ಏರಿಕೆ ಕಂಡ ʻಅಮೃತಧಾರೆʼ; ʻಗಟ್ಟಿಮೇಳʼಕ್ಕೆ ನಾಲ್ಕನೇ ಸ್ಥಾನ!

Karnataka weather Forecast
ಮಳೆ3 days ago

Karnataka weather : ಮಳೆಯಲ್ಲೆ ತಪಸ್ಸಿಗೆ ಕುಳಿತ ವೃದ್ಧ; ಇನ್ನೊಂದು ವಾರ ನಾನ್‌ ಸ್ಟಾಪ್‌ ವರುಣನ ಅಬ್ಬರ

Sigandur launch
ಶಿವಮೊಗ್ಗ3 days ago

Sigandur launch: ಸಿಗಂದೂರು ಲಾಂಚ್‌ನಲ್ಲಿ ಭಾರಿ ವಾಹನಗಳಿಗೆ ನಿರ್ಬಂಧ

Karnataka Rain
ಮಳೆ4 days ago

Karnataka Rain : ಭಾರಿ ಮಳೆಗೆ ಮರ ಬಿದ್ದು ಮೇಕೆಗಳು ಸಾವು; ಸಿಡಿಲಿಗೆ ಎಲೆಕ್ಟ್ರಿಕ್‌ ಅಂಗಡಿ ಸುಟ್ಟು ಭಸ್ಮ

Lok Sabha Election Result 2024 Live
ದೇಶ6 days ago

Lok Sabha Election Result 2024 Live: ಲೋಕಸಭೆ ಚುನಾವಣೆ ಫಲಿತಾಂಶದ ಲೈವ್‌ ಇಲ್ಲಿ ವೀಕ್ಷಿಸಿ

Karnataka Rain
ಮಳೆ7 days ago

Karnataka Rain : 133 ವರ್ಷದ ರೆಕಾರ್ಡ್ ಬ್ರೇಕ್ ಮಾಡಿದ ʻಬೆಂಗಳೂರು ಮಳೆʼ

Snake Rescue Snakes spotted in heavy rain
ಮಳೆ7 days ago

Snake Rescue: ಮಳೆ ನೀರಿನಲ್ಲಿ ಹರಿದು ಬಂದು ಬೈಕ್‌ನಲ್ಲಿ ಸೇರಿಕೊಂಡ ಹಾವು; ಮನೆಗಳಲ್ಲೂ ಪ್ರತ್ಯಕ್ಷ

Karnataka Rain
ಮಳೆ1 week ago

Karnataka Rain : ವೀಕೆಂಡ್‌ ಮೋಜಿಗೆ ವರುಣ ಅಡ್ಡಿ; ಭಾನುವಾರ ಸಂಜೆಗೆ ಮಳೆ ಕಾಟ

Liquor ban
ಬೆಂಗಳೂರು1 week ago

Liquor Ban : ಮುಂದಿನ ಏಳು ದಿನಗಳಲ್ಲಿ ನಾಲ್ಕೂವರೆ ದಿನ ಬಾರ್ ಕ್ಲೋಸ್; ಎಣ್ಣೆ ಸಿಗೋದು ಯಾವ ದಿನ?

Assault Case in Shivamogga
ಕ್ರೈಂ2 weeks ago

Assault Case : ಶಿವಮೊಗ್ಗದಲ್ಲಿ ಮತ್ತೆ ಬಾಲ ಬಿಚ್ಚಿದ ಪುಂಡರು; ಗಾಂಜಾ ನಶೆಯಲ್ಲಿ ವಾಹನಗಳು ಪೀಸ್‌ ಪೀಸ್‌

Karnataka weather Forecast
ಮಳೆ2 weeks ago

Karnataka Weather : ಚಿಕ್ಕಮಗಳೂರಲ್ಲಿ ಭಾರಿ ಮಳೆ; ಯಾದಗಿರಿಯಲ್ಲಿ ಕರೆಂಟ್‌ ಕಟ್‌, ಜನರೇಟರ್‌ನಿಂದ ಮೊಬೈಲ್‌ಗಳಿಗೆ ಚಾರ್ಜಿಂಗ್‌!

ಟ್ರೆಂಡಿಂಗ್‌