ಸಂಪಾದಕೀಯ: ಉತ್ತರ ಕನ್ನಡಕ್ಕೆ ಅಗತ್ಯವಾಗಿ ಬೇಕು ಮಲ್ಟಿ ಸ್ಪೆಷಾಲಿಟಿ ಆಸ್ಪತ್ರೆ - Vistara News

ಪ್ರಮುಖ ಸುದ್ದಿ

ಸಂಪಾದಕೀಯ: ಉತ್ತರ ಕನ್ನಡಕ್ಕೆ ಅಗತ್ಯವಾಗಿ ಬೇಕು ಮಲ್ಟಿ ಸ್ಪೆಷಾಲಿಟಿ ಆಸ್ಪತ್ರೆ

ಸೂಪರ್‌ ಸ್ಪೆಷಾಲಿಟಿ ಅಥವಾ ಮಲ್ಟಿ ಸ್ಪೆಷಾಲಿಟಿ ಆಸ್ಪತ್ರೆ ಸ್ಥಾಪಿಸಿ ಎಂದು ಉತ್ತರ ಕನ್ನಡ ಜಿಲ್ಲೆಯ ಜನ ಹಲವು ವರ್ಷಗಳಿಂದ ಆಗ್ರಹಿಸುತ್ತ ಬಂದಿದ್ದಾರೆ. ಇಂಥದೊಂದು ಆಸ್ಪತ್ರೆಯ ಅವಶ್ಯಕತೆ ಉತ್ತರ ಕನ್ನಡ ಜಿಲ್ಲೆಗಿದೆ. ರಾಜ್ಯ ಸರ್ಕಾರ ಈ ಬೇಡಿಕೆಯನ್ನು ಗಂಭೀರವಾಗಿ ಪರಿಗಣಿಸಬೇಕು.

VISTARANEWS.COM


on

Hospital
ಮಹತ್ವದ, ಕುತೂಹಲಕರ ಸುದ್ದಿಗಾಗಿ ಫಾಲೊ ಮಾಡಿ
Koo

ಉತ್ತರ ಕನ್ನಡ ಜಿಲ್ಲೆಗೆ ಮಲ್ಟಿ ಸ್ಪೆಷಾಲಿಟಿ ಆಸ್ಪತ್ರೆ (Super Speciality Hospital) ಬೇಕು ಎನ್ನುವುದು ಹಲವು ವರ್ಷಗಳ ಬೇಡಿಕೆ. ಈ ಬಗ್ಗೆ ಜಿಲ್ಲೆಯ ಜನ ನಿರಂತರವಾಗಿ ದನಿ ಎತ್ತುತ್ತಿದ್ದಾರೆ, ಪ್ರತಿಭಟನೆ-ಅಭಿಯಾನ ನಡೆಸಿದ್ದಾರೆ. ಈ ಹಿನ್ನೆಲೆಯಲ್ಲಿ ಹಿಂದಿನ ಬಿಜೆಪಿ ಸರ್ಕಾರ ಸ್ಪಷ್ಟ ಭರವಸೆ ನೀಡಿತ್ತು. ಜಿಲ್ಲೆಯ ಎಲ್ಲ ಪ್ರದೇಶಗಳಿಗೂ ಕೇಂದ್ರವಾಗುವಂತೆ ಕುಮಟಾದಲ್ಲಿ ಅತ್ಯಾಧುನಿಕ ಆಸ್ಪತ್ರೆ ಸ್ಥಾಪಿಸುವ ನಿಟ್ಟಿನಲ್ಲಿ ಆಗಿನ ಆರೋಗ್ಯ ಸಚಿವ ಡಾ. ಕೆ ಸುಧಾಕರ್‌ ಅವರು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದರು. ಕುಮಟಾದಲ್ಲಿ ಸೂಪರ್‌ ಸ್ಪೆಶಾಲಿಟಿ ಆಸ್ಪತ್ರೆಯನ್ನು ನಿರ್ಮಿಸಲಾಗುವುದು ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ಕೂಡ ಬಜೆಟ್‌ ಭಾಷಣದಲ್ಲಿ ಪ್ರಕಟಿಸಿದ್ದರು. ಆದರೆ ಈಗ ಸಿದ್ದರಾಮಯ್ಯ ಸರ್ಕಾರ ಹೊಸ ಆಸ್ಪತ್ರೆ ಸ್ಥಾಪನೆಯ ಪ್ರಸ್ತಾಪ ಕೈಬಿಟ್ಟಿದೆ. ಸಿದ್ದರಾಮಯ್ಯ ಅವರ ಬಜೆಟ್‌ನಲ್ಲಿ ಉತ್ತರ ಕನ್ನಡಕ್ಕೆ ಮಲ್ಟಿ ಸ್ಪೆಷಾಲಿಟಿ ಆಸ್ಪತ್ರೆ ಸ್ಥಾಪನೆಯ ಘೋಷಣೆ ಆಗಲಿದೆ ಎಂಬ ನಿರೀಕ್ಷೆಯಲ್ಲಿದ್ದ ಜಿಲ್ಲೆಯ ಜನರಿಗೆ ಭಾರಿ ನಿರಾಸೆಯಾಗಿದೆ. ಈಗ ಕಾರವಾರದಲ್ಲಿರುವ ಸರ್ಕಾರಿ ಮೆಡಿಕಲ್‌ ಕಾಲೇಜು ಆಸ್ಪತ್ರೆಯ ಹಾಸಿಗೆಗಳನ್ನು ಹೆಚ್ಚಿಸುವ ಘೋಷಣೆ ಮಾತ್ರ ಮಾಡಲಾಗಿದೆ.

ಉತ್ತರ ಕನ್ನಡ ಜಿಲ್ಲೆ ಕರಾವಳಿ, ಬಯಲುಸೀಮೆ, ಗುಡ್ಡಗಾಡು ಪ್ರದೇಶಗಳನ್ನು ಒಳಗೊಂಡಂತೆ ವಿಶಿಷ್ಟ ಭೌಗೋಳಿಕ ಚಹರೆಯನ್ನು ಹೊಂದಿದೆ. ಜಿಲ್ಲೆಯ ಜನ ಅಪಘಾತ, ತುರ್ತು ಚಿಕಿತ್ಸೆ ಇತ್ಯಾದಿ ಸಂದರ್ಭಗಳಲ್ಲಿ ಸುಮಾರು 350 ಕಿ.ಮೀ ದೂರದ ಮಂಗಳೂರು ಅಥವಾ ಉಡುಪಿಯ ಸುಸಜ್ಜಿತ ಆಸ್ಪತ್ರೆಗಳನ್ನೇ ಆಶ್ರಯಿಸಬೇಕಾಗಿದೆ. ಇದರಿಂದಾಗಿ ಸಾವು ನೋವಿನ ಪ್ರಮಾಣ ಹೆಚ್ಚುತ್ತಿದೆ. ಮುಖ್ಯವಾಗಿ ಕಾರವಾರ-ಮಂಗಳೂರು ರಾಷ್ಟ್ರೀಯ ಹೆದ್ದಾರಿಯಲ್ಲಿ ದಿನವೂ ಹತ್ತಾರು ಅಪಘಾತಗಳು ಸಂಭವಿಸುತ್ತವೆ. ರಸ್ತೆ ಅಗಲೀಕರಣದ ಅವೈಜ್ಞಾನಿಕ ಕಾಮಗಾರಿಯಿಂದಲೂ ಅಪಘಾತಗಳ ಪ್ರಮಾಣ ಹೆಚ್ಚುತ್ತಿದೆ. ವಾಹನ ಸವಾರರು ತಮ್ಮದಲ್ಲದ ತಪ್ಪಿಗೆ ನಿತ್ಯವೂ ಅಪಘಾತಗಳಿಗೆ ಒಳಗಾಗುತ್ತಿದ್ದಾರೆ. ಆದರೆ ಸ್ಥಳೀಯವಾಗಿ ಸಕಾಲಕ್ಕೆ ಸೂಕ್ತ ಚಿಕಿತ್ಸೆ ಸಿಗದೆ ಪ್ರಾಣ ಕಳೆದುಕೊಳ್ಳುತ್ತಿದ್ದಾರೆ. ಹೃದಯಾಘಾತ, ಹಾವು ಕಡಿತದಂಥ ತುರ್ತು ಸಂದರ್ಭದಲ್ಲೂ ಜಿಲ್ಲೆಯ ಜನ ನೆರೆಯ ಜಿಲ್ಲೆಯ ಬಹುದೂರದ ಆಸ್ಪತ್ರೆಗೆ ಹೋಗುವಷ್ಟರಲ್ಲಿ ಜೀವ ಕಳೆದುಕೊಳ್ಳುತ್ತಿದ್ದಾರೆ. ಈ ಹಿನ್ನೆಲೆಯಲ್ಲಿ, ಆದಷ್ಟು ಬೇಗ ಸಕಲ ಚಿಕಿತ್ಸೆ ಸೌಲಭ್ಯ ಇರುವ ಸೂಪರ್‌ ಸ್ಪೆಷಾಲಿಟಿ ಆಸ್ಪತ್ರೆ ಸ್ಥಾಪಿಸಿ ಎನ್ನುವುದು ಉತ್ತರ ಕನ್ನಡ ಜಿಲ್ಲೆಯ ಜನರ ಒಕ್ಕೊರಲ ಆಗ್ರಹವಾಗಿದೆ.

ಮಲ್ಟಿ ಸ್ಪೆಷಾಲಿಟಿ ಅಥವಾ ಸೂಪರ್‌ ಸ್ಪೆಷಾಲಿಟಿ ಆಸ್ಪತ್ರೆಯನ್ನು ನಿರ್ಮಿಸಬೇಕು ಎಂದು ಒತ್ತಾಯಿಸಿ ಉತ್ತರ ಕನ್ನಡದ ಜನ ನಾನಾ ಸಂಘಟನೆಗಳ ಆಶ್ರಯದಲ್ಲಿ ಈಗಾಗಲೇ ತೀವ್ರ ಹೋರಾಟವನ್ನೂ ನಡೆಸಿದ್ದಾರೆ. 2019ರಿಂದಲೂ ಸಾಮಾಜಿಕ ಜಾಲತಾಣಗಳಲ್ಲಿ ನೆಟ್ಟಿಗರು ಪ್ರಧಾನಿ, ಮುಖ್ಯಮಂತ್ರಿಗಳ ಮಟ್ಟದಲ್ಲಿ ಗಮನ ಸೆಳೆಯಲು ಅಭಿಯಾನಗಳನ್ನು ನಡೆಸಿದ್ದರು. ಎಲ್ಲ ಪಕ್ಷಗಳ ಮುಖಂಡರೂ ಈ ನ್ಯಾಯಯುತ ಬೇಡಿಕೆಯನ್ನು ಬೆಂಬಲಿಸಿದ್ದರು. ಟ್ವಿಟರ್‌, ಫೇಸ್‌ಬುಕ್‌ ಇತ್ಯಾದಿ ಜಾಲತಾಣಗಳಲ್ಲಿ ಅಭಿಯಾನದ ಜತೆಗೆ ಬೆಂಗಳೂರಿನಲ್ಲಿಯೂ 2022 ಜುಲೈ 30ರಂದು ಬೃಹತ್‌ ಪ್ರತಿಭಟನೆ ನಡೆದಿತ್ತು. ಅಕ್ಟೋಬರ್‌ ವೇಳೆಗೆ ಸರ್ಕಾರ ಬೇಡಿಕೆ ಈಡೇರಿಸುವ ಭರವಸೆ ನೀಡಿತ್ತು.

ಇದನ್ನೂ ಓದಿ : ವಿಸ್ತಾರ ಸಂಪಾದಕೀಯ: ಚಂದ್ರಯಾನ 3, ಮನುಕುಲದ ಇನ್ನೊಂದು ಮಹಾ ಜಿಗಿತ

ಕಾರವಾರದಲ್ಲಿ ಈಗಿರುವ ಮೆಡಿಕಲ್‌ ಕಾಲೇಜು ಆಸ್ಪತ್ರೆಯಲ್ಲಿನ ಹಾಸಿಗೆ ಹೆಚ್ಚಿಸಿದ ಮಾತ್ರಕ್ಕೆ ಜಿಲ್ಲೆಯ ಜನರ ಸಮಸ್ಯೆ ಪರಿಹಾರ ಆಗುವುದಿಲ್ಲ, ಬೇಡಿಕೆ ಈಡೇರಿದಂತೆ ಆಗುವುದಿಲ್ಲ. ಏಕೆಂದರೆ ಕಾರವಾರ ಜಿಲ್ಲೆಯ ಕೇಂದ್ರ ಭಾಗದಲ್ಲಿಲ್ಲ. ಜಿಲ್ಲೆಯ ಭೌಗೋಳಿಕ ವ್ಯಾಪ್ತಿಯನ್ನು ಗಮನಿಸಿದಾಗ ಕುಮಟಾವನ್ನು ಹೃದಯಭಾಗವೆಂದು ಪರಿಗಣಿಸಬಹುದಾಗಿದೆ. ಹಾಗಾಗಿ ಕುಮಟಾ ಸುತ್ತಮುತ್ತ ಸೂಪರ್‌ ಸ್ಪೆಷಾಲಿಟಿ ಆಸ್ಪತ್ರೆ ಸ್ಥಾಪಿಸಿದರೆ ಜಿಲ್ಲೆಯ ಎಲ್ಲ ಭಾಗದ ಜನರಿಗೆ ಹೆಚ್ಚು ಉಪಯುಕ್ತವಾಗುತ್ತದೆ. ಸಿದ್ದರಾಮಯ್ಯ ಅವರ ಕಾಂಗ್ರೆಸ್‌ ಸರ್ಕಾರ ಆದಷ್ಟು ಬೇಗ ಉತ್ತರ ಕನ್ನಡ ಜಿಲ್ಲೆಯ ಜನರ ಈ ಬೇಡಿಕೆಯನ್ನು ಈಡೇರಿಸಬೇಕು. ಸಕಾಲಿಕ ತುರ್ತು ಚಿಕಿತ್ಸೆ ಸಿಗದೆ ಆಗುತ್ತಿರುವ ಜಿಲ್ಲೆಯ ಜನರ ಪ್ರಾಣ ಹಾನಿಯನ್ನು ತಪ್ಪಿಸಬೇಕು.

ಕ್ಷಣ ಕ್ಷಣದ ಮಾಹಿತಿಗಾಗಿ Vistara News FaceBook ಪೇಜ್ ಫಾಲೋ ಮಾಡಿ
ಮಹತ್ವದ ಮಾಹಿತಿಗಾಗಿ ವಿಸ್ತಾರ ನ್ಯೂಸ್ ಆ್ಯಪ್ ಉಚಿತವಾಗಿ ಡೌನ್ ಲೋಡ್ ಮಾಡಿಕೊಳ್ಳಿ: Andriod App | IOS App
Continue Reading
Click to comment

Leave a Reply

Your email address will not be published. Required fields are marked *

ಕ್ರೀಡೆ

IND vs PAK : ಭಾರತ ವಿರುದ್ಧ ಸೋಲುವುದಕ್ಕಾಗಿ ಮ್ಯಾಚ್ ಫಿಕ್ಸಿಂಗ್ ಮಾಡಿದ ಪಾಕ್​ ಆಟಗಾರ; ಆರೋಪ

IND vs PAK : ಪಂದ್ಯವು ಕಡಿಮೆ ಸ್ಕೋರಿಂಗ್ ಥ್ರಿಲ್ಲರ್ ಆಗಿತ್ತು. 2 ನೇ ಇನ್ನಿಂಗ್ಸ್ ನ ಅಂತಿಮ ಎಸೆತದವರೆಗೂ ಸಂಪೂರ್ಣವಾಗಿ ಸಾಗಿತು. ಪಾಕಿಸ್ತಾನಕ್ಕೆ 120 ಎಸೆತಗಳಲ್ಲಿ ಕೇವಲ 120 ರನ್​ಗಳ ಅಗತ್ಯವಿತ್ತು. ಈ ಸಮೀಕರಣ ಬರೆಯಲು ಸರಳವಾಗಿ ಕಂಡರೂ, ಅನುಷ್ಠಾನವು ಅತ್ಯಂತ ಕಳಪೆಯಾಗಿತ್ತು. ಕೊನೆಯಲ್ಲಿ ಗ್ರೀನ್ ಆರ್ಮಿ 6 ರನ್​ಗಳಿಂದ ಸೋತಿತು.

VISTARANEWS.COM


on

IND vs PAK
Koo

ನವದೆಹಲಿ: ಐಸಿಸಿ ಟಿ 20 ವಿಶ್ವಕಪ್ 2024 ರಲ್ಲಿ ಸಾಂಪ್ರದಾಯಿಕ ಎದುರಾಳಿ ಭಾರತ (IND vs PAK) ವಿರುದ್ಧ ಸೋತ ನಂತರ ಪಾಕಿಸ್ತಾನದ ಕ್ರಿಕೆಟ್ ಅಭಿಮಾನಿಗಳು ಸಿಟ್ಟಿಗೆದ್ದಿದ್ದಾರೆ. ಜತೆಗೆ ಮಾಜಿ ಆಟಗಾರರು ಬೆಂಕಿಯಾಗಿದ್ದಾರೆ. ಅವರೆಲ್ಲರೂ ಒಂದೊಂದು ತೆರನಾದ ಆರೋಪಗಳನ್ನು ಮಾಡುತ್ತಿದ್ದಾರೆ. ಅಂತೆಯೇ ಅಲ್ಲಿನ ಮಾಜಿ ಕ್ರಿಕೆಟಿಗರಾದ ಸಲೀಮ್ ಮಲಿಕ್ ಮ್ಯಾಚ್ ಫಿಕ್ಸಿಂಗ್ ಆರೋಪವನ್ನು ಮಾಡಿದ್ದಾರೆ.

2007 ರಲ್ಲಿ ಐಸಿಸಿ ಟಿ 20 ವಿಶ್ವಕಪ್ ಪ್ರಾರಂಭವಾದಾಗಿನಿಂದ ಭಾರತ ಮತ್ತು ಪಾಕಿಸ್ತಾನ 8 ನೇ ಬಾರಿಗೆ ಮುಖಾಮುಖಿಯಾಗಿವೆ. ಮೊದಲಿನಿಂದಲೂ, ಪಾಕಿಸ್ತಾನಿಗಳ ಮೇಲೆ ಭಾರತೀಯರು ಯಾವಾಗಲೂ ಮೇಲುಗೈ ಸಾಧಿಸಿದ್ದಾರೆ. 2007ರ ಆವೃತ್ತಿಯ ಗ್ರೂಪ್ ಮ್ಯಾಚ್ ಆಗಿರಲಿ ಅಥವಾ ಫೈನಲ್ ಆಗಿರಲಿ, ಮೆನ್ ಇನ್ ಬ್ಲೂ ತಂಡವು ಒಂದು ಬಾರಿ ಹೊರತುಪಡಿಸಿ ಪ್ರತಿ ಬಾರಿಯೂ ಗೆದ್ದಿದೆ.

ಇದನ್ನೂ ಓದಿ: IND vs PAK : ಪಾಕಿಸ್ತಾನದ ಬೌಲರ್​ ವಿರುದ್ಧ ವಿಶೇಷ ದಾಖಲೆ ಮಾಡಿದ ರೋಹಿತ್ ಶರ್ಮಾ

2021 ರಲ್ಲಿ, ಬಾಬರ್ ಅಜಮ್ ನೇತೃತ್ವದ ಪಾಕಿಸ್ತಾನವು ಟಿ 20 ವಿಶ್ವಕಪ್​​ನಲ್ಲಿ ಭಾರತದ ವಿರುದ್ಧ ಮೊದಲ ಗೆಲುವನ್ನು ಸಾಧಿಸಿತು. ಆದರೆ ಆ ಗೆಲುವಿನ ನಂತರ ಎರಡು ಬಾರಿ ಸೋತಿದ್ದಾರೆ. 2022 ರ ಆವೃತ್ತಿಯಲ್ಲಿ, ವಿರಾಟ್ ಕೊಹ್ಲಿ ಪಾಕಿಸ್ತಾನಿಗಳಿಂದ ಗೆಲುವನ್ನು ಕಸಿದುಕೊಂಡಿದ್ದರು. ಭಾನುವಾರ ರಾತ್ರಿ ಜಸ್​ಪ್ರಿತ್​ ಬುಮ್ರಾ ಪಾಕ್ ಆಸೆಗೆ ತಣ್ಣೀರು ಎರಚಿದ್ದರು.

ಈ ಪಂದ್ಯವು ಕಡಿಮೆ ಸ್ಕೋರಿಂಗ್ ಥ್ರಿಲ್ಲರ್ ಆಗಿತ್ತು. 2 ನೇ ಇನ್ನಿಂಗ್ಸ್ ನ ಅಂತಿಮ ಎಸೆತದವರೆಗೂ ಸಂಪೂರ್ಣವಾಗಿ ಸಾಗಿತು. ಪಾಕಿಸ್ತಾನಕ್ಕೆ 120 ಎಸೆತಗಳಲ್ಲಿ ಕೇವಲ 120 ರನ್​ಗಳ ಅಗತ್ಯವಿತ್ತು. ಈ ಸಮೀಕರಣ ಬರೆಯಲು ಸರಳವಾಗಿ ಕಂಡರೂ, ಅನುಷ್ಠಾನವು ಅತ್ಯಂತ ಕಳಪೆಯಾಗಿತ್ತು. ಕೊನೆಯಲ್ಲಿ ಗ್ರೀನ್ ಆರ್ಮಿ 6 ರನ್​ಗಳಿಂದ ಸೋತಿತು.

ಸಲೀಮ್ ಮಲಿಕ್ ಕೋಪ ಇಮಾದ್ ಮೇಲೆ

ಪಾಕಿಸ್ತಾನದ ಮಾಜಿ ನಾಯಕ ಸಲೀಮ್ ಮಲಿಕ್ ಅವರು ಆಲ್ರೌಂಡರ್ ಇಮಾದ್ ವಾಸಿಮ್ ವಿರುದ್ಧ ವಾಗ್ದಾಳಿ ನಡೆಸಿದ್ದಾರೆ. ವಾಸಿಮ್ 2023 ರಲ್ಲಿ ನಿವೃತ್ತಿ ಘೋಷಿಸಿದ್ದರು/ ಅವರು ವಿಶ್ವದಾದ್ಯಂತದ ದೇಶೀಯ ಲೀಗ್​ಗಳಲ್ಲಿ ಮಾತ್ರ ಆಡುತ್ತಿದ್ದರು. ಅವರು ವಾಪಸ್ ಆಗಿರುವುದೂ ಟೀಕೆಗೆ ಗುರಿಯಾಗಿತ್ತು. ಭಾನುವಾರದ ಅವರ ಪ್ರದರ್ಶನವು ಅವರನ್ನು ಇನ್ನಷ್ಟು ಟೀಕೆಗೆ ಗುರಿ ಮಾಡಿತು.

ನಸ್ಸೌ ಕೌಂಟಿ ಸ್ಟೇಡಿಯಂನಲ್ಲಿ ನಡೆದ ಪಂದ್ಯದಲ್ಲಿ ಇಮಾದ್ ವಾಸಿಮ್ 23 ಎಸೆತಗಳಲ್ಲಿ ಕೇವಲ 15 ರನ್ ಬಾರಿಸಿದ್ದರು. ಮಂಡಳಿಯೇ ವಾಪಸ್​ ಕರೆಸಿದ ಆಟಗಾರನಿಂದ ಇದು ಹೆಚ್ಚು ಪ್ರಶ್ನಾರ್ಹ. ರಾಷ್ಟ್ರೀಯ ಮಟ್ಟದ ಸುದ್ದಿ ವಾಹಿನಿಯೊಂದರೊಂದಿಗಿನ ಚಾಟ್​ನಲ್ಲಿ ಸಲೀಮ್ ಮಲಿಕ್ ಅವರು ಸುಮಾರು 4 ಓವರ್​ಗಳ ಕಳಪೆ ಬ್ಯಾಟಿಂಗ್ ಬಗ್ಗೆ ತರಾಟೆಗೆ ತೆಗೆದುಕೊಂಡಿದ್ದಾರೆ.

ವಾಸಿಮ್ ಉದ್ದೇಶಪೂರ್ವಕವಾಗಿ ಅನೇಕ ಚೆಂಡುಗಳನ್ನು ವ್ಯರ್ಥ ಮಾಡಿದ್ದಾರೆ ಮತ್ತು ಅವರು ಸ್ವಾರ್ಥದಿಂದ ಆಡಿದರು ಮತ್ತು ಅವರ ಸರಾಸರಿಯನ್ನು ಹೆಚ್ಚಿಸಲು ಬಯಸಿದ್ದರು ಎಂದು ಸಲೀಮ್ ಮಲಿಕ್ ಆರೋಪಿಸಿದ್ದಾರೆ. “ನೀವು ಅವರ (ವಾಸಿಮ್) ಇನ್ನಿಂಗ್ಸ್ ಅನ್ನು ನೋಡಿದರೆ ಅವರು ರನ್ ಗಳಿಸದೆ ಚೆಂಡುಗಳನ್ನು ವ್ಯರ್ಥ ಮಾಡುತ್ತಿದ್ದಾರೆ. ಅದು ಮ್ಯಾಚ್​ ಫಿಕ್ಸಿಂಗ್ ರೀತಿ ಅನಿಸುತ್ತಿತ್ತು. ರನ್ ಚೇಸ್​​ ವಿಷಯಗಳನ್ನು ಕಷ್ಟಕರವಾಗಿಸುತ್ತಿದ್ದಾರೆ ಎಂದು ತೋರುತ್ತದೆ” ಎಂದು ಸಲೀಮ್ ಮಲಿಕ್ ಹೇಳಿದ್ದಾರೆ.

ಶಾಹಿದ್ ಅಫ್ರಿದಿ ಹೇಳಿದ್ದೇನು?

ಪಾಕಿಸ್ತಾನದ ದಂತಕಥೆ ಶಾಹಿದ್ ಅಫ್ರಿದಿ ಕೂಡ ತಂಡದ ಬಗ್ಗೆ ಬೇಸರ ವ್ಯಕ್ತಪಡಿಸಿದ್ದಾರೆ. ಅಫ್ರಿದಿ ಅವರು ಆಟಗಾರರ ಬಗ್ಗೆ ತೀವ್ರ ಅಸಮಾಧಾನ ಹೊಂದಿದ್ದು ವಿಶ್ವ ಕಪ್​ ಮುಗಿದ ಬಳಿಕ ಬಹಿರಂಗ ಪಡಿಸುವೆ ಎಂದಿದ್ದಾರೆ.

“ಒಬ್ಬ ನಾಯಕನು ಎಲ್ಲರನ್ನೂ ಒಟ್ಟುಗೂಡಿಸುತ್ತಾನೆ. ಆತನೇ ತಂಡದ ವಾತಾವರಣವನ್ನು ಹಾಳುಮಾಡಬಹುದು ಅಥವಾ ಅವನು ತಂಡವನ್ನು ನಿರ್ಮಿಸಬಹುದು. ಈ ವಿಶ್ವಕಪ್ ಮುಗಿಯಲಿ, ನಾನು ಬಹಿರಂಗವಾಗಿ ಮಾತನಾಡುತ್ತೇನೆ” ಎಂದು ಶಾಹಿದ್ ಅಫ್ರಿದಿ ಹೇಳಿದ್ದಾರೆ.

Continue Reading

ದೇಶ

Tshering Tobgay: ಮೋದಿ ನನ್ನ ಗುರು, ದೊಡ್ಡಣ್ಣ;‌ ಭೂತಾನ್‌ ಪ್ರಧಾನಿ ತ್ಶೆರಿಂಗ್‌ ತೋಬ್ಗೆ ಬಹುಪರಾಕ್!

Tshering Tobgay: ನರೇಂದ್ರ ಮೋದಿ ಅವರು ಕಳೆದ ಮಾರ್ಚ್‌ನಲ್ಲಿ ಭೂತಾನ್‌ಗೆ ಭೇಟಿ ನೀಡಿ, ಎರಡು ದಿನ ತಂಗಿದ್ದರು. “ನರೇಂದ್ರ ಮೋದಿ ಅವರು ಭೂತಾನ್‌ಗೆ ಆಗಮಿಸುವ ಗ್ಯಾರಂಟಿ ನೀಡಿದ್ದರು. ಈಗ ಆ ಗ್ಯಾರಂಟಿ ಸಾಕಾರಗೊಂಡಿದೆ” ಎಂಬುದಾಗಿ ಇದೇ ವೇಳೆ ತ್ಶೆರಿಂಗ್‌ ತೋಬ್ಗೆ ಹೇಳಿದ್ದರು. ಈಗ ಮೋದಿ ಪ್ರಮಾಣವಚನ ಕಾರ್ಯಕ್ರಮದ ಹಿನ್ನೆಲೆಯಲ್ಲಿ ಭಾರತಕ್ಕೆ ಬಂದಿರುವ ತ್ಶೆರಿಂಗ್‌ ತೋಬ್ಗೆ ಅವರು ನರೇಂದ್ರ ಮೋದಿ ಅವರನ್ನು ಹೊಗಳಿದ್ದಾರೆ.

VISTARANEWS.COM


on

Tshering Tobgay
Koo

ನವದೆಹಲಿ: ನರೇಂದ್ರ ಮೋದಿ (Narendra Modi) ಅವರು ಸತತ ಮೂರನೇ ಬಾರಿಗೆ ದೇಶದ ಪ್ರಧಾನಿಯಾಗಿ ಭಾನುವಾರ (ಜೂನ್‌ 9) ಪ್ರಮಾಣವಚನ ಸ್ವೀಕರಿಸಿದ್ದಾರೆ. ದೇಶ-ವಿದೇಶಗಳ ಸಾವಿರಾರು ಗಣ್ಯರು ಪದಗ್ರಹಣ ಕಾರ್ಯಕ್ರಮಕ್ಕೆ ಸಾಕ್ಷಿಯಾಗಿದ್ದಾರೆ. ಇದರ ಬೆನ್ನಲ್ಲೇ, ಭೂತಾನ್‌ ಪ್ರಧಾನಿ ತ್ಶೆರಿಂಗ್‌ ತೋಬ್ಗೆ (Tshering Tobgay) ಅವರು ನರೇಂದ್ರ ಮೋದಿ ಅವರನ್ನು ಮುಕ್ತಕಂಠದಿಂದ ಹೊಗಳಿದ್ದಾರೆ. “ನರೇಂದ್ರ ಮೋದಿ ಅವರು ನನ್ನ ಗುರು, ಅವರು ನನ್ನ ದೊಡ್ಡಣ್ಣ ಇದ್ದಂತೆ” ಎಂದು ಎನ್‌ಡಿಟಿವಿಗೆ ನೀಡಿದ ಸಂದರ್ಶನದಲ್ಲಿ ಅವರು ಹೇಳಿದ್ದಾರೆ.

“ನರೇಂದ್ರ ಮೋದಿ ಅವರ ಮಾರ್ಗದರ್ಶನವು ನನಗೆ ಪ್ರಮುಖವಾಗಿದೆ. ಅವರು ನನಗೆ ಗುರು, ಸಹೋದರ ಇದ್ದಂತೆ. ಅವರ ಜತೆ ಉತ್ತಮ ಬಾಂಧವ್ಯ ಹೊಂದಿರುವುದು ನನಗೆ ಖುಷಿಯಾದ ವಿಚಾರ. ಅವರು ದೂರದೃಷ್ಟಿ ಹೊಂದಿರುವ ನಾಯಕರಾಗಿದ್ದು, ಆ ಯೋಜನೆಯನ್ನು ಅವರು ಸಾಕಾರಗೊಳಿಸುತ್ತಾರೆ. ಇದೆಲ್ಲದರ ಹೊರತಾಗಿ ಅವರು ನನಗೆ ದೊಡ್ಡಣ್ಣ ಇದ್ದಂತೆ. ನಾನು ಅವರನ್ನು ಬಡೆ ಭಾಯ್‌ ಎಂದೇ ಕರೆಯುತ್ತೇನೆ” ಎಂಬುದಾಗಿ ತ್ಶೆರಿಂಗ್‌ ತೋಬ್ಗೆ ಅವರು ಸಂದರ್ಶನದಲ್ಲಿ ಹೇಳಿಕೊಂಡಿದ್ದಾರೆ.

ನರೇಂದ್ರ ಮೋದಿ ಅವರು ಕಳೆದ ಮಾರ್ಚ್‌ನಲ್ಲಿ ಭೂತಾನ್‌ಗೆ ಭೇಟಿ ನೀಡಿ, ಎರಡು ದಿನ ತಂಗಿದ್ದರು. “ನರೇಂದ್ರ ಮೋದಿ ಅವರು ಭೂತಾನ್‌ಗೆ ಆಗಮಿಸುವ ಗ್ಯಾರಂಟಿ ನೀಡಿದ್ದರು. ಈಗ ಆ ಗ್ಯಾರಂಟಿ ಸಾಕಾರಗೊಂಡಿದೆ” ಎಂಬುದಾಗಿ ಇದೇ ವೇಳೆ ತ್ಶೆರಿಂಗ್‌ ತೋಬ್ಗೆ ಹೇಳಿದ್ದರು. ಅಷ್ಟೇ ಅಲ್ಲ, ಮೋದಿ ಅವರು ಭೂತಾನ್‌ಗೆ ಭೇಟಿ ನೀಡಿದ್ದ ವೇಳೆ ಅಲ್ಲಿನ ಸರ್ಕಾರವು ದೇಶದ ಅತ್ಯುನ್ನತ ನಾಗರಿಕ ಪ್ರಶಸ್ತಿ “ಡ್ರಕ್‌ ಗ್ಯಾಲ್ಪೋ” ನೀಡಿ ಗೌರವಿಸಿದ್ದರು. ಇದರೊಂದಿಗೆ ಭೂತಾನ್‌ ಅತ್ಯುನ್ನತ ನಾಗರಿಕ ಪ್ರಶಸ್ತಿ ಸ್ವೀಕರಿಸಿದ ವಿಶ್ವದ ನಾಲ್ಕನೇ ವಿದೇಶಿ ನಾಯಕ ಎಂಬ ಖ್ಯಾತಿಗೆ ಮೋದಿ ಭಾಜನರಾಗಿದ್ದರು.

ಭಾರತದ ಸಾವಿರಾರು ಗಣ್ಯರ ಜತೆಗೆ ನೆರೆ ರಾಷ್ಟ್ರಗಳ ನಾಯಕರು ಕೂಡ ಭಾಗವಹಿಸಿದ್ದರು. ಶ್ರೀಲಂಕಾ ಅಧ್ಯಕ್ಷ ರನಿಲ್ ವಿಕ್ರಮಸಿಂಘೆ, ಮಾಲ್ಡೀವ್ಸ್ ಅಧ್ಯಕ್ಷ ಮೊಹಮದ್ ಮುಯಿಝು, ಸೆಶೆಲ್ಸ್‌ನ ಉಪಾಧ್ಯಕ್ಷ ಅಹ್ಮದ್ ಅಫೀಫ್; ಬಾಂಗ್ಲಾದೇಶದ ಪ್ರಧಾನಿ ಶೇಖ್ ಹಸೀನಾ; ಮಾರಿಷಸ್‌ನ ಪ್ರಧಾನ ಮಂತ್ರಿ, ಪ್ರವಿಂದ್ ಕುಮಾರ್ ಜುಗ್ನೌತ್; ನೇಪಾಳದ ಪ್ರಧಾನಿ, ಪುಷ್ಪ ಕಮಲ್ ದಹಲ್ ‘ಪ್ರಚಂಡ’ ಮತ್ತು ಭೂತಾನ್ ಪ್ರಧಾನಿ, ತ್ಶೆರಿಂಗ್ ಟೊಬ್ಗೇ ಉಪಸ್ಥಿತರಿದ್ದರು.

ಇದನ್ನೂ ಓದಿ: Narendra Modi 3.0 : ಮೋದಿ ಅಧಿಕಾರಕ್ಕೆ ಬಾರದಿರಲಿ ಎಂದು ಕಾದು ಕೂತು, ಕೊನೆಗೂ ಅಭಿನಂದನೆ ತಿಳಿಸಿದ ಪಾಕಿಸ್ತಾನ!

Continue Reading

ಪ್ರಮುಖ ಸುದ್ದಿ

Prajwal Revanna Case: ಪ್ರಜ್ವಲ್ ರೇವಣ್ಣಗೆ 14 ದಿನ ನ್ಯಾಯಾಂಗ ಬಂಧನ; ಪರಪ್ಪನ ಅಗ್ರಹಾರ ಜೈಲಿಗೆ ಶಿಫ್ಟ್‌

Prajwal Revanna Case: ಪ್ರಜ್ವಲ್‌ ರೇವಣ್ಣಗೆ 10 ದಿನ ಎಸ್‌ಐಟಿ ಕಸ್ಟಡಿ ಮುಗಿದ ಹಿನ್ನೆಲೆಯಲ್ಲಿ 14 ದಿನ ನ್ಯಾಯಾಂಗ ಬಂಧನ ವಿಧಿಸಲಾಗಿದೆ.

VISTARANEWS.COM


on

Prajwal Revanna Case
Koo

ಬೆಂಗಳೂರು: ಅತ್ಯಾಚಾರ ಮತ್ತು ಲೈಂಗಿಕ ದೌರ್ಜನ್ಯ ಪ್ರಕರಣದಲ್ಲಿ ಮಾಜಿ ಸಂಸದ ಪ್ರಜ್ವಲ್‌ ರೇವಣ್ಣಗೆ (Prajwal Revanna Case) ಜೂನ್‌ 24ರವರೆಗೆ ನ್ಯಾಯಾಂಗ ಬಂಧನ ವಿಧಿಸಲಾಗಿದೆ. 10 ದಿನ ಎಸ್‌ಐಟಿ ಕಸ್ಟಡಿ ಮುಗಿದ ಹಿನ್ನೆಲೆಯಲ್ಲಿ 14 ದಿನ ನ್ಯಾಯಾಂಗ ಬಂಧನ ವಿಧಿಸಿ 42ನೇ ಎಸಿಎಂಎಂ ಕೋರ್ಟ್‌ ಆದೇಶ ಹೊರಡಿಸಿದೆ, ಹೀಗಾಗಿ ಪ್ರಜ್ವಲ್‌ ರೇವಣ್ಣನನ್ನು ಪರಪ್ಪನ ಅಗ್ರಹಾರ ಜೈಲಿಗೆ ಶಿಫ್ಟ್‌ ಮಾಡಲಾಗುತ್ತಿದೆ.

ಬಸವನಗುಡಿಯ ನಿವಾಸದಲ್ಲಿ ಸ್ಥಳ ಮಹಜರು ನಡೆಸಿದ ಬಳಿಕ ಪ್ರಜ್ವಲ್‌ನನ್ನು ಕೋರ್ಟ್‌ಗೆ ಹಾಜರುಪಡಿಸಲಾಗಿತ್ತು. ಪ್ರಕರಣದ ವಿಚಾರಣೆ ನಡೆಸಿದೆ ನ್ಯಾಯಾಧೀಶರು ಆರೋಪಿಗೆ 14 ನ್ಯಾಯಾಂಗ ಬಂಧನ ವಿಧಿಸಿದ್ದಾರೆ.

ವಿಚಾರಣೆ ವೇಳೆ ಪೊಲೀಸರಿಂದ ತೊಂದರೆ ಆಯ್ತಾ ಎಂದು ಪ್ರಜ್ವಲ್‌ಗೆ ಜಡ್ಜ್ ಪ್ರಶ್ನೆ ಕೇಳಿದ್ದು, ಇದಕ್ಕೆ ಏನೂ ತೊಂದರೆ ಆಗಿಲ್ಲ ಸ್ವಾಮಿ ಎಂದು ಉತ್ತರಿಸಿದ್ದಾರೆ. ನಂತರ ಎಸ್ಐಟಿಯಿಂದ ಮೆಡಿಕಲ್‌ ಟೆಸ್ಟ್ ಹಾಗೂ ಇನ್ನಿತರ ಮಾಹಿತಿ ಪಡೆದು ಪ್ರಜ್ವಲ್‌ಗೆ ನ್ಯಾಯಾಂಗ ಬಂಧನಕ್ಕೆ ನ್ಯಾಯಾಧೀಶರು ಸೂಚಿಸಿದ್ದಾರೆ.

ಇದನ್ನೂ ಓದಿ | ಮಾನಸಿಕ ಖಿನ್ನತೆಯಿಂದ ಕುದೂರು ಠಾಣೆಯ ಹೆಡ್‌ ಕಾನ್ಸ್‌ಟೇಬಲ್‌ ಆತ್ಮಹತ್ಯೆಗೆ ಶರಣು

ಎಸ್‌ಐಟಿಯಿಂದ ಪ್ರಜ್ವಲ್‌ ರೇವಣ್ಣ ಕೋಣೆ ತಲಾಶ್‌, ಭವಾನಿ ತುಳಸಿ ಪೂಜೆ!

bhavani revanna prajwal revanna case

ಬೆಂಗಳೂರು: ಲೈಂಗಿಕ ದೌರ್ಜನ್ಯ (Physical Abuse) ಪ್ರಕರಣದಲ್ಲಿ ಎಸ್‌ಐಟಿಯಿಂದ (SIT) ತನಿಖೆಗೆ ಒಳಗಾಗಿರುವ ಪ್ರಜ್ವಲ್‌ ರೇವಣ್ಣ (Prajwal Revanna Case) ಅವರ ಮನೆಯನ್ನು ಇಂದು ಮತ್ತೊಮ್ಮೆ ಮಹಜರು ಮಾಡಲಾಗಿದೆ. ಇದೇ ಸಂದರ್ಭದಲ್ಲಿ ತಾಯಿ ಭವಾನಿ ರೇವಣ್ಣ (Bhavani Revanna) ಅದೇ ಮನೆಯಲ್ಲೇ ಇದ್ದರೂ ಮಗನಿಗೆ ಮುಖಾಮುಖಿ ಆಗಲಿಲ್ಲ ಎಂದು ತಿಳಿದುಬಂದಿದೆ.

ಪ್ರಜ್ವಲ್ ರೇವಣ್ಣನನ್ನು ಎಸ್ಐಟಿ ಅಧಿಕಾರಿಗಳು ಇಂದು ಮಹಜರ್‌ಗೆ ಕರೆದೊಯ್ದರು. ಇಂದು ಪ್ರಜ್ವಲ್‌ನನ್ನು ನ್ಯಾಯಾಲಯಕ್ಕೆ ಹಾಜರು ಮಾಡುವ ಮುನ್ನ ಬೆಂಗಳೂರಿನ ಬಸವನಗುಡಿಯ ನಿವಾಸದಲ್ಲಿ ಮಹಜರ್ ಪ್ರಕ್ರಿಯೆ ನಡೆಸಿದರು. ಸ್ಥಳದಲ್ಲಿ ಬಿಗಿ ಭದ್ರತೆ ಒದಗಿಸಲಾಗಿತ್ತು. ಈ ಸಂದರ್ಭದಲ್ಲಿ ಪ್ರಜ್ವಲ್‌ ತಾಯಿ ಭವಾನಿ ರೇವಣ್ಣ ಅಸೌಖ್ಯದ ಕಾರಣ ಹೇಳಿ ಮನೆಯಲ್ಲೇ ಇದ್ದರು. ಆದರೆ ಪ್ರಜ್ವಲ್‌ಗೆ ಮುಖಾಮುಖಿಯಾಗಲಿಲ್ಲ.

ಈ ಮುನ್ನವೇ ಸ್ಥಳ ಮಹಜರು ಮಾಡುವ ವೇಳೆ ಅಡ್ಡಿಪಡಿಸದಂತೆ ಭವಾನಿ ಅವರಿಗೆ ಸೂಚನೆ ನೀಡಲಾಗಿತ್ತು ಎನ್ನಲಾಗಿದೆ. ಭವಾನಿ ಅವರು ಕೂಡ ಸಂತ್ರಸ್ತ ಮಹಿಳೆಯ ಕಿಡ್ನಾಪ್‌ ಕೇಸ್‌ನಲ್ಲಿ ಎಸ್‌ಐಟಿ ತನಿಖೆಗೆ ಒಳಗಾಗುತ್ತಿದ್ದಾರೆ. ಕೋರ್ಟ್‌ ಭವಾನಿಗೆ ಮಧ್ಯಂತರ ಜಾಮೀನು ನೀಡಿದ್ದು, ಸಂಜೆಯ ಒಳಗೆ ತನಿಖೆ ಮುಗಿಸಿ ಕಳಿಸುವಂತೆ ಎಸ್‌ಐಟಿಗೆ ನಿರ್ದೇಶನ ನೀಡಿದೆ.

ಪ್ರಜ್ವಲ್‌ ಮನೆಯಲ್ಲಿ ತನ್ನನ್ನು ಲೈಂಗಿಕವಾಗಿ ಕಿರುಕುಳಕ್ಕೆ ಒಳಪಡಿಸಲಾಗಿದೆ ಎಂದು ಸಂತ್ರಸ್ತೆ ತೋರಿಸಿದ ಕೊಠಡಿ ಮಹಜರು ಮಾಡಲಾಗಿದೆ. ಈ ಸಂದರ್ಭದಲ್ಲಿ ಭವಾನಿ ಅವರು ತುಳಸಿ ಕಟ್ಟೆಗೆ ಪೂಜೆ ಮಾಡುತ್ತಿರುವುದು ಕಂಡುಬಂತು. ಕೈಯಲ್ಲಿ ಊರುಗೋಲು ಹಿಡಿದುಕೊಂಡು ಬಂದ ಭವಾನಿ ರೇವಣ್ಣ, ಮೊದಲ ಮಹಡಿಯಲ್ಲಿರುವ ತುಳಸಿ‌ಕಟ್ಟೆಗೆ ಪೂಜೆ ಸಲ್ಲಿಸಿದರು. ಅನಾರೋಗ್ಯದ ಹಿನ್ನೆಲೆಯಲ್ಲಿ ಅವರು ವಾಕಿಂಗ್ ಸ್ಟಿಕ್ ಹಿಡಿದುಕೊಂಡು ಓಡಾಡುತ್ತಿದ್ದಾರೆ ಎನ್ನಲಾಗಿದೆ.

ಅಶ್ಲೀಲ ವಿಡಿಯೋದಲ್ಲಿ ತಾನಿರುವುದನ್ನು ಪ್ರಜ್ವಲ್‌ ಒಪ್ಪಿಕೊಂಡಿಲ್ಲ. ಹೀಗಾಗಿ, ಅಶ್ಲೀಲ ವಿಡಿಯೋದಲ್ಲಿ ಕಾಣಿಸುವ ಜಾಗಕ್ಕೂ ಬಸವನಗುಡಿ ಮನೆಯ ಕೋಣೆಗೂ ತಾಳೆ ಆಗ್ತಿದೆಯಾ ಎಂದು ಪರಿಶೀಲನೆ ನಡೆಸಲಾಗುತ್ತಿದೆ. ವೈರಲ್ ಆಗಿರುವ ವಿಡಿಯೋದಲ್ಲಿ ಎಲ್ಲೂ ಪ್ರಜ್ವಲ್ ಮುಖ ಕಾಣಿಸುತ್ತಿಲ್ಲ. ಹಾಗಾಗಿ ಮನೆಯ ಕೆಲ ಜಾಗಗಳನ್ನು ಎವಿಡೆನ್ಸ್ ಆಗಿ ಅಧಿಕಾರಿಗಳು ಪರಿಗಣಿಸಲಿದ್ದಾರೆ. ಸಂತ್ರಸ್ತೆ ದೂರಿನಲ್ಲಿ ಉಲ್ಲೇಖ ಮಾಡಿರುವ ಜಾಗ ಹಾಗೂ ಅಶ್ಲೀಲ ವಿಡಿಯೋದಲ್ಲಿರುವ ಜಾಗಗಳು ಮ್ಯಾಚ್‌ ಆದರೆ ಪ್ರಜ್ವಲ್‌ ಲಾಕ್‌ ಆದಂತೆಯೇ.

ಇನ್ನೊಂದೆಡೆ ವಿಡಿಯೋ ಮಾಡಿಕೊಂಡ ಮದರ್ ಡಿವೈಸ್‌ಗಾಗಿ ಎಸ್‌ಐಟಿ ಹುಡುಕಾಟ ನಡೆಸಿದೆ. ಈ ಮೂಲ ಮೊಬೈಲ್‌ ಕಳೆದುಹೋಗಿದೆ. ಒಂದು ವರ್ಷದ ಹಿಂದೆಯೇ ಈ ಬಗ್ಗೆ ಹೊಳೆನರಸೀಪುರ ಪೊಲೀಸ್‌ ಠಾಣೆಯಲ್ಲಿ ದೂರು ನೀಡಿರುವುದಾಗಿ ಪ್ರಜ್ವಲ್‌ ಹೇಳಿದ್ದಾರೆ.

Continue Reading

ಸಿನಿಮಾ

Noor Malabika Das: ಕಾಜೋಲ್‌ ಜತೆ ನಟಿಸಿದ್ದ, ದಿ ಟ್ರಯಲ್‌ ಖ್ಯಾತಿಯ ಬಾಲಿವುಡ್‌ ನಟಿ ದಾಸ್‌ ಆತ್ಮಹತ್ಯೆ

Noor Malabika Das: ನೂರ್‌ ಮಾಳವಿಕಾ ದಾಸ್‌ ಅವರು ಹಿಂದಿ ಸಿನಿಮಾಗಳು ಹಾಗೂ ವೆಬ್‌ಸಿರೀಸ್‌ಗಳಲ್ಲಿ ನಟಿಸಿ ಖ್ಯಾತಿ ಗಳಿಸಿದ್ದರು. ಸಿಸ್ಕಿಯಾನ್‌, ವಾಕ್‌ಮನ್‌, ತೀತ್ರಿ ಚಟ್ನಿ, ಜಜ್ಞ ಉಪಾಯ್‌, ಚಾರ್‌ಮಸುಖ್‌, ದೇಖ್‌ ಅನ್‌ದೇಖಿ, ಬ್ಯಾಕ್‌ರೋಡ್‌ ಹಲ್‌ಚಲ್‌ ಸೇರಿ ಹಲವು ಸಿನಿಮಾ, ಸಿರೀಸ್‌ಗಳಲ್ಲಿ ನಟಿಸಿ ಸೈ ಎನಿಸಿಕೊಂಡಿದ್ದರು. ಇನ್‌ಸ್ಟಾಗ್ರಾಂನಲ್ಲೂ ಅವರು ಸಕ್ರಿಯರಾಗಿದ್ದರು. ಆದರೆ, ಅವರ ಆತ್ಮಹತ್ಯೆಗೆ ಕಾರಣ ಗೊತ್ತಾಗಿಲ್ಲ.

VISTARANEWS.COM


on

Noor Malabika Das
Koo

ಮುಂಬೈ: ಬಾಲಿವುಡ್‌ ನಟಿ ಕಾಜೋಲ್‌ ಅಭಿನಯದ ದಿ ಟ್ರಯಲ್‌ (The Trial) ವೆಬ್‌ ಸಿರೀಸ್‌ ಖ್ಯಾತಿ ನಟಿ ನೂರ್‌ ಮಾಳವಿಕಾ ದಾಸ್‌ (Noor Malabika Das) ಅವರು ಮುಂಬೈನಲ್ಲಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎಂದು ಪೊಲೀಸ್‌ ಮೂಲಗಳು ತಿಳಿಸಿವೆ. ಲೋಖಂಡ್‌ವಾಲಾದಲ್ಲಿರುವ ತಮ್ಮ ಫ್ಲ್ಯಾಟ್‌ನಲ್ಲಿ 32 ವರ್ಷದ ಬಾಲಿವುಡ್‌ ನಟಿಯು ಫ್ಯಾನ್‌ಗೆ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಜೂನ್‌ 6ರಂದೇ ಅವರು ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎಂಬುದಾಗಿ ಮೂಲಗಳು ತಿಳಿಸಿವೆ.

ಜೂನ್‌ 6ರಂದೇ ನಟಿ ಆತ್ಮಹತ್ಯೆ ಮಾಡಿಕೊಂಡಿದ್ದು, ಯಾರಿಗೂ ಗೊತ್ತಾಗಿಲ್ಲ. ಮನೆಯಲ್ಲಿ ಯಾರೂ ಇರಲಿಲ್ಲ ಹಾಗೂ ಅಕ್ಕಪಕ್ಕದ ಮನೆಯವರಿಗೂ ವಿಷಯ ಗೊತ್ತಾಗಿಲ್ಲ. ಕೆಲ ದಿನಗಳ ಬಳಿಕ ಅಪಾರ್ಟ್‌ಮೆಂಟ್‌ನಲ್ಲಿ ದುರ್ವಾಸನೆ ಕಂಡುಬಂದಿದ್ದು, ಕೂಡಲೇ ನಿವಾಸಿಗಳು ಪೊಲೀಸರಿಗೆ ಮಾಹಿತಿ ನೀಡಿದ್ದಾರೆ. ಪೊಲೀಸರು ಬಂದು ಫ್ಲ್ಯಾಟ್‌ ಬಾಗಿಲು ತೆಗೆದಾಗ ನಟಿಯ ಶವವು ಕೊಳೆತ ರೀತಿಯಲ್ಲಿ ಪತ್ತೆಯಾಗಿದೆ. ಅಂಧೇರಿಯ ಓಶ್ವಿವಾರ ಪ್ರದೇಶದಲ್ಲಿರುವ ಫ್ಲ್ಯಾಟ್‌ನಲ್ಲಿ ನಟಿಯು ವಾಸವಿದ್ದರು.

ನೂರ್‌ ಮಾಳವಿಕಾ ದಾಸ್‌ ಅವರು ಹಿಂದಿ ಸಿನಿಮಾಗಳು ಹಾಗೂ ವೆಬ್‌ಸಿರೀಸ್‌ಗಳಲ್ಲಿ ನಟಿಸಿ ಖ್ಯಾತಿ ಗಳಿಸಿದ್ದರು. ಸಿಸ್ಕಿಯಾನ್‌, ವಾಕ್‌ಮನ್‌, ತೀತ್ರಿ ಚಟ್ನಿ, ಜಜ್ಞ ಉಪಾಯ್‌, ಚಾರ್‌ಮಸುಖ್‌, ದೇಖ್‌ ಅನ್‌ದೇಖಿ, ಬ್ಯಾಕ್‌ರೋಡ್‌ ಹಲ್‌ಚಲ್‌ ಸೇರಿ ಹಲವು ಸಿನಿಮಾ, ಸಿರೀಸ್‌ಗಳಲ್ಲಿ ನಟಿಸಿ ಸೈ ಎನಿಸಿಕೊಂಡಿದ್ದರು. ಅದರಲ್ಲೂ, ದಿ ಟ್ರಯಲ್‌ ವೆಬ್‌ಸಿರೀಸ್‌ ಅವರಿಗೆ ಹೆಚ್ಚು ಹೆಸರು ತಂದುಕೊಂಡಿತ್ತು. ಕಾಜೋಲ್‌ ಜತೆ ಅವರು ತೆರೆ ಹಂಚಿಕೊಂಡಿದ್ದರು. ಅವರು ನಟಿಸಿದ ಕೆಲ ಸಿನಿಮಾಗಳು ಬಿಡುಗಡೆಗೆ ಬಾಕಿ ಇವೆ ಎಂದು ತಿಳಿದುಬಂದಿದೆ.

ಅಸ್ಸಾಂ ಮೂಲದವರಾದ ನೂರ್‌ ಮಾಳವಿಕಾ ದಾಸ್‌ ಅವರು ನಟನೆಗೆ ಕಾಲಿಡುವ ಮೊದಲು ಕತಾರ್‌ ಏರ್‌ವೇಸ್‌ನಲ್ಲಿ ಗಗನಸಖಿಯಾಗಿದ್ದರು. ಇನ್‌ಸ್ಟಾಗ್ರಾಂನಲ್ಲಿ 1.63 ಲಕ್ಷ ಫಾಲೋವರ್‌ಗಳನ್ನು ಹೊಂದಿರುವ ನಟಿಯು ಆಗಾಗ ಫೋಟೊ ಹಾಗೂ ವಿಡಿಯೊಗಳನ್ನು ಪೋಸ್ಟ್‌ ಮಾಡುತ್ತ ಸಕ್ರಿಯರಾಗಿದ್ದರು. ಕೆಲ ದಿನಗಳ ಹಿಂದಷ್ಟೇ ನಟಿಯು ಇನ್‌ಸ್ಟಾಗ್ರಾಂನಲ್ಲಿ ಪೋಸ್ಟ್‌ ಕೂಡ ಮಾಡಿದ್ದರು. ಇಷ್ಟೆಲ್ಲ ಸಕ್ರಿಯರಾಗಿದ್ದ ನಟಿಯು ಆತ್ಮಹತ್ಯೆ ಮಾಡಿಕೊಳ್ಳಲು ಕಾರಣ ಏನೆಂದು ತಿಳಿದುಬಂದಿಲ್ಲ.

ಇದನ್ನೂ ಓದಿ: ನಟಿ ಪವಿತ್ರ ಜಯರಾಮ್‌ ಸಾವಿನ ಬೆನ್ನಲ್ಲೇ ಪ್ರಿಯತಮ ಚಂದ್ರಕಾಂತ್ ಆತ್ಮಹತ್ಯೆ; ಖಿನ್ನತೆಗೆ ನಟ ಬಲಿ?

Continue Reading
Advertisement
Karnataka weather Forecast
ಮಳೆ9 mins ago

Karnataka Weather : ಭಾರಿ ಮಳೆಗೆ ಮನೆ ಗೋಡೆ ಕುಸಿದು ಎಮ್ಮೆಗಳು ಸಾವು; ಆಕಳಿನ ಜೀವ ತೆಗೆದ ವಿದ್ಯುತ್‌ ತಂತಿ

IND vs PAK
ಕ್ರೀಡೆ24 mins ago

IND vs PAK : ಭಾರತ ವಿರುದ್ಧ ಸೋಲುವುದಕ್ಕಾಗಿ ಮ್ಯಾಚ್ ಫಿಕ್ಸಿಂಗ್ ಮಾಡಿದ ಪಾಕ್​ ಆಟಗಾರ; ಆರೋಪ

Tshering Tobgay
ದೇಶ25 mins ago

Tshering Tobgay: ಮೋದಿ ನನ್ನ ಗುರು, ದೊಡ್ಡಣ್ಣ;‌ ಭೂತಾನ್‌ ಪ್ರಧಾನಿ ತ್ಶೆರಿಂಗ್‌ ತೋಬ್ಗೆ ಬಹುಪರಾಕ್!

Sambhavami Yuge Yuge in june 21st Release
ಸಿನಿಮಾ40 mins ago

Kannada New Movie: ಹಳ್ಳಿಗಳನ್ನು ಉಳಿಸುವ ಹುಡುಗರ ಕಥೆ ʻಸಂಭವಾಮಿ ಯುಗೇ ಯುಗೇʼ: ಇದೇ ಜೂನ್‌ 21ಕ್ಕೆ ತೆರೆಗೆ!

Prajwal Revanna Case
ಪ್ರಮುಖ ಸುದ್ದಿ52 mins ago

Prajwal Revanna Case: ಪ್ರಜ್ವಲ್ ರೇವಣ್ಣಗೆ 14 ದಿನ ನ್ಯಾಯಾಂಗ ಬಂಧನ; ಪರಪ್ಪನ ಅಗ್ರಹಾರ ಜೈಲಿಗೆ ಶಿಫ್ಟ್‌

Noor Malabika Das
ಸಿನಿಮಾ59 mins ago

Noor Malabika Das: ಕಾಜೋಲ್‌ ಜತೆ ನಟಿಸಿದ್ದ, ದಿ ಟ್ರಯಲ್‌ ಖ್ಯಾತಿಯ ಬಾಲಿವುಡ್‌ ನಟಿ ದಾಸ್‌ ಆತ್ಮಹತ್ಯೆ

Yuva Rajkumar divorce reaction by shiva Rajkumar
ಸ್ಯಾಂಡಲ್ ವುಡ್1 hour ago

Yuva Rajkumar: ಸತ್ಯವಾಗಿಯೂ ʻಯುವʼ ಡಿವೋರ್ಸ್‌ ವಿಚಾರ ನಮಗೆ ಗೊತ್ತಿಲ್ಲ ಎಂದ ಶಿವಣ್ಣ!

Self Harming
ರಾಯಚೂರು1 hour ago

Self Harming : ಮಾನಸಿಕ ಖಿನ್ನತೆ; ಮಗಳ ಜತೆ ನೇಣು ಬಿಗಿದುಕೊಂಡು ತಾಯಿ ಆತ್ಮಹತ್ಯೆ

Narendra Modi 3.20
ಪ್ರಮುಖ ಸುದ್ದಿ2 hours ago

Narendra Modi 3.0 : ಮೋದಿ ಅಧಿಕಾರಕ್ಕೆ ಬಾರದಿರಲಿ ಎಂದು ಕಾದು ಕೂತು, ಕೊನೆಗೂ ಅಭಿನಂದನೆ ತಿಳಿಸಿದ ಪಾಕಿಸ್ತಾನ!

Election Results 2024
ಕರ್ನಾಟಕ2 hours ago

Election Results 2024: ಟಾರ್ಗೆಟ್ 20 ರೀಚ್ ಆಗಲು ವಿಫಲ; ಎಐಸಿಸಿಯಿಂದ ಪರಾಮರ್ಶೆ ಸಮಿತಿ, ಸಚಿವರ ಮೇಲೆ ತೂಗುಗತ್ತಿ!

Sharmitha Gowda in bikini
ಕಿರುತೆರೆ8 months ago

Geetha Serial Kannada: ನಿದ್ದೆ ಕದ್ದ ಚೋರಿ! ನಟಿ `ಭಾನುಮತಿ’ ಹಾಟ್‌ ಪೋಟೊಗಳಿಗೆ ಫ್ಯಾನ್ಸ್ ಫುಲ್ ಫಿದಾ

Kannada Serials
ಕಿರುತೆರೆ8 months ago

Kannada Serials TRP: 2ನೇ ಸ್ಥಾನದಲ್ಲಿ 2 ಧಾರಾವಾಹಿಗಳು; ಟಿಆರ್‌ಪಿ ರೇಸ್‌ನಲ್ಲಿಲ್ಲ ಭಾಗ್ಯಲಕ್ಷ್ಮೀ!

Bigg Boss- Saregamapa 20 average TRP
ಕಿರುತೆರೆ8 months ago

Kannada Serials TRP: ಏಳನೇ ಸ್ಥಾನಕ್ಕೆ ʻಅಮೃತಧಾರೆʼ ಕುಸಿತ; ಬಿಗ್‌ ಬಾಸ್‌-ಸರಿಗಮಪ ಟಿಆರ್‌ಪಿ ಎಷ್ಟು?

galipata neetu
ಕಿರುತೆರೆ6 months ago

Kanyadana Serial: ಕಿರುತೆರೆಗೆ ಮತ್ತೆ ಎಂಟ್ರಿ ಕೊಟ್ಟ ʻಗಾಳಿಪಟʼ ಖ್ಯಾತಿಯ ʻನೀತುʼ!

Kannada Serials
ಕಿರುತೆರೆ9 months ago

Kannada Serials TRP: ನಾಲ್ಕನೇ ಸ್ಥಾನಕ್ಕೆ ಕುಸಿತ ಕಂಡ ʻಸೀತಾ ರಾಮʼ; ಟಿಆರ್‌ಪಿ ರೇಸ್‌ಗೆ ʻಭಾಗ್ಯಲಕ್ಷ್ಮಿʼ ಬ್ಯಾಕ್‌!

Kannada Serials
ಕಿರುತೆರೆ8 months ago

Kannada Serials TRP: ಟಿಆರ್‌ಪಿಯಲ್ಲಿ ʻಭಾಗ್ಯಲಕ್ಷ್ಮೀʼ ಹವಾ; ʻಪುಟ್ಟಕ್ಕನ ಮಕ್ಕಳುʼ ಧಾರಾವಾಹಿಗೆ ಸಂಕಷ್ಟ!

Bigg Boss' dominates TRP; Sita Rama fell to the sixth position
ಕಿರುತೆರೆ8 months ago

Kannada Serials TRP: ಟಿಆರ್‌ಪಿಯಲ್ಲಿ ʻಬಿಗ್ ಬಾಸ್ʼದೇ ಮೇಲುಗೈ; 6ನೇ ಸ್ಥಾನಕ್ಕೆ ಕುಸಿದ ʻಸೀತಾ ರಾಮʼ

geetha serial Dhanush gowda engagement
ಕಿರುತೆರೆ6 months ago

Dhanush Gowda: ಗೀತಾ ಧಾರಾವಾಹಿ ನಟನ ನಿಶ್ಚಿತಾರ್ಥ; ಭವ್ಯಾಳ ಕಮೆಂಟ್‌ ಬಾಕ್ಸ್‌ ಆಫ್‌!

varun
ಕಿರುತೆರೆ7 months ago

Brindavana Serial: ʼಬೃಂದಾವನʼ ಧಾರಾವಾಹಿಯಲ್ಲಿ ದೊಡ್ಡ ಟ್ವಿಸ್ಟ್‌; ಪ್ರಮುಖ ಪಾತ್ರಧಾರಿಯೇ ಬದಲು

Kannada Serials
ಕಿರುತೆರೆ9 months ago

Kannada Serials TRP: ಟಿಆರ್‌ಪಿಯಲ್ಲಿ ಏರಿಕೆ ಕಂಡ ʻಅಮೃತಧಾರೆʼ; ʻಗಟ್ಟಿಮೇಳʼಕ್ಕೆ ನಾಲ್ಕನೇ ಸ್ಥಾನ!

Karnataka weather Forecast
ಮಳೆ9 mins ago

Karnataka Weather : ಭಾರಿ ಮಳೆಗೆ ಮನೆ ಗೋಡೆ ಕುಸಿದು ಎಮ್ಮೆಗಳು ಸಾವು; ಆಕಳಿನ ಜೀವ ತೆಗೆದ ವಿದ್ಯುತ್‌ ತಂತಿ

Karnataka weather Forecast
ಮಳೆ3 days ago

Karnataka weather : ಮಳೆಯಲ್ಲೆ ತಪಸ್ಸಿಗೆ ಕುಳಿತ ವೃದ್ಧ; ಇನ್ನೊಂದು ವಾರ ನಾನ್‌ ಸ್ಟಾಪ್‌ ವರುಣನ ಅಬ್ಬರ

Sigandur launch
ಶಿವಮೊಗ್ಗ3 days ago

Sigandur launch: ಸಿಗಂದೂರು ಲಾಂಚ್‌ನಲ್ಲಿ ಭಾರಿ ವಾಹನಗಳಿಗೆ ನಿರ್ಬಂಧ

Karnataka Rain
ಮಳೆ4 days ago

Karnataka Rain : ಭಾರಿ ಮಳೆಗೆ ಮರ ಬಿದ್ದು ಮೇಕೆಗಳು ಸಾವು; ಸಿಡಿಲಿಗೆ ಎಲೆಕ್ಟ್ರಿಕ್‌ ಅಂಗಡಿ ಸುಟ್ಟು ಭಸ್ಮ

Lok Sabha Election Result 2024 Live
ದೇಶ6 days ago

Lok Sabha Election Result 2024 Live: ಲೋಕಸಭೆ ಚುನಾವಣೆ ಫಲಿತಾಂಶದ ಲೈವ್‌ ಇಲ್ಲಿ ವೀಕ್ಷಿಸಿ

Karnataka Rain
ಮಳೆ1 week ago

Karnataka Rain : 133 ವರ್ಷದ ರೆಕಾರ್ಡ್ ಬ್ರೇಕ್ ಮಾಡಿದ ʻಬೆಂಗಳೂರು ಮಳೆʼ

Snake Rescue Snakes spotted in heavy rain
ಮಳೆ1 week ago

Snake Rescue: ಮಳೆ ನೀರಿನಲ್ಲಿ ಹರಿದು ಬಂದು ಬೈಕ್‌ನಲ್ಲಿ ಸೇರಿಕೊಂಡ ಹಾವು; ಮನೆಗಳಲ್ಲೂ ಪ್ರತ್ಯಕ್ಷ

Karnataka Rain
ಮಳೆ1 week ago

Karnataka Rain : ವೀಕೆಂಡ್‌ ಮೋಜಿಗೆ ವರುಣ ಅಡ್ಡಿ; ಭಾನುವಾರ ಸಂಜೆಗೆ ಮಳೆ ಕಾಟ

Liquor ban
ಬೆಂಗಳೂರು1 week ago

Liquor Ban : ಮುಂದಿನ ಏಳು ದಿನಗಳಲ್ಲಿ ನಾಲ್ಕೂವರೆ ದಿನ ಬಾರ್ ಕ್ಲೋಸ್; ಎಣ್ಣೆ ಸಿಗೋದು ಯಾವ ದಿನ?

Assault Case in Shivamogga
ಕ್ರೈಂ2 weeks ago

Assault Case : ಶಿವಮೊಗ್ಗದಲ್ಲಿ ಮತ್ತೆ ಬಾಲ ಬಿಚ್ಚಿದ ಪುಂಡರು; ಗಾಂಜಾ ನಶೆಯಲ್ಲಿ ವಾಹನಗಳು ಪೀಸ್‌ ಪೀಸ್‌

ಟ್ರೆಂಡಿಂಗ್‌