Bheemana Amavasya: ನಟ ಪ್ರೇಮ್ ಪಾದ ಪೂಜೆ ಮಾಡಿ ಆಶೀರ್ವಾದ ಪಡೆದ ಪತ್ನಿ - Vistara News

ಕರ್ನಾಟಕ

Bheemana Amavasya: ನಟ ಪ್ರೇಮ್ ಪಾದ ಪೂಜೆ ಮಾಡಿ ಆಶೀರ್ವಾದ ಪಡೆದ ಪತ್ನಿ

Bheemana Amavasya: ಭೀಮನ ಅಮಾವಾಸ್ಯೆ ಹಿನ್ನೆಲೆಯಲ್ಲಿ ನಟ ನೆನಪಿರಲಿ ಪ್ರೇಮ್ ಅವರ ಪತ್ನಿ ಜ್ಯೋತಿ ಅವರು ಪತಿಯ ಪಾದ ಪೂಜೆ ಮಾಡಿ ಆಶೀರ್ವಾದ ಪಡೆದರು.

VISTARANEWS.COM


on

Actor Prems wife performs pada puja
ಮಹತ್ವದ, ಕುತೂಹಲಕರ ಸುದ್ದಿಗಾಗಿ ಫಾಲೊ ಮಾಡಿ
Koo

ಬೆಂಗಳೂರು: ಭಾರತೀಯ ಸಂಪ್ರದಾಯದಲ್ಲಿ ಪತಿಯನ್ನು ದೇವರೆಂದು ಭಾವಿಸಿ, ಪೂಜಿಸುವ ಸಂಪ್ರದಾಯ ಇದೆ. ಭೀಮನ ಅಮಾವಾಸ್ಯೆ (Bheemana Amavasya) ಹಿನ್ನೆಲೆಯಲ್ಲಿ ದೇಶದೆಲ್ಲೆಡೆ ಮಹಿಳೆಯರು ಪತಿಗೆ ಪೂಜೆ ಸಲ್ಲಿಸಿ, ಆಯಸ್ಸು, ಆರೋಗ್ಯ ವೃದ್ಧಿಯಾಗಲಿ ಎಂದು ಪ್ರಾರ್ಥಿಸಿದ್ದಾರೆ. ಅದರಂತೆ ಸೋಮವಾರ, ನಗರದ ನಿವಾಸದಲ್ಲಿ ಸ್ಯಾಂಡಲ್‌ವುಡ್ ನಟ ನೆನಪಿರಲಿ ಪ್ರೇಮ್ ಅವರ ಪತ್ನಿ ಜ್ಯೋತಿ ಅವರು ಪತಿಯ ಪಾದ ಪೂಜೆ ಮಾಡಿ ಆಶೀರ್ವಾದ ಪಡೆದರು.

ಸನಾತನ ಹಿಂದು ಸಂಪ್ರದಾಯದಲ್ಲಿ ದೇವರು-ದೇವತೆಗಳನ್ನು ಪೂಜಿಸುವುದಷ್ಟೆ ಅಲ್ಲದೆ ಪವಿತ್ರವಾದ ಸಂಬಂಧಗಳನ್ನು ಪೂಜಿಸಿ, ಗೌರವಿಸುವ ಪದ್ಧತಿ ಇದೆ. ಹೀಗಾಗಿ ನಾಡಿನೆಲ್ಲೆಡೆ ಭೀಮನ ಅಮಾವಾಸ್ಯೆಯನ್ನು ಮಹಿಳೆಯರು ದೇವಸ್ಥಾನಗಳಿಗೆ ತೆರಳಿ ಪೂಜೆ ಸಲ್ಲಿಸುವ ಜತೆಗೆ ಮನೆಯಲ್ಲಿ ಪತಿಗೆ ಪೂಜೆ ಸಲ್ಲಿಸಿ ಸಂಭ್ರಮದಿಂದ ಆಚರಿಸಿದ್ದು ಕಂಡುಬಂತು. ‌

ಇದನ್ನೂ ಓದಿ | Adhika Masa 2023 : ಅಧಿಕಮಾಸದಲ್ಲಿ ಈ ಕೆಲಸಗಳನ್ನು ಮಾಡಲೇಬೇಡಿ!

ಕ್ಷಣ ಕ್ಷಣದ ಮಾಹಿತಿಗಾಗಿ Vistara News FaceBook ಪೇಜ್ ಫಾಲೋ ಮಾಡಿ
ಮಹತ್ವದ ಮಾಹಿತಿಗಾಗಿ ವಿಸ್ತಾರ ನ್ಯೂಸ್ ಆ್ಯಪ್ ಉಚಿತವಾಗಿ ಡೌನ್ ಲೋಡ್ ಮಾಡಿಕೊಳ್ಳಿ: Andriod App | IOS App
Continue Reading
Click to comment

Leave a Reply

Your email address will not be published. Required fields are marked *

ಕರ್ನಾಟಕ

DK Shivakumar: ಎತ್ತಿನಹೊಳೆ ಕಾಮಗಾರಿಗೆ 500 ಎಕರೆ ನೀಡಲು ಅರಣ್ಯ ಇಲಾಖೆ ಒಪ್ಪಿಗೆ

DK Shivakumar: ಎತ್ತಿನಹೊಳೆ ಕಾಮಗಾರಿಗೆ ಅಡಚಣೆ ಉಂಟುಮಾಡಿರುವ 500 ಎಕರೆ ಜಾಗವನ್ನು ಹಸ್ತಾಂತರಿಸಲು ಅರಣ್ಯ ಇಲಾಖೆ ಒಪ್ಪಿದೆ ಎಂದು ತಿಳಿಸಿರುವ ಡಿಸಿಎಂ ಡಿ.ಕೆ. ಶಿವಕುಮಾರ್, ಈ ಯೋಜನೆಗೆ ಅಗತ್ಯವಿರುವ ಜಾಗವನ್ನು ಅರಣ್ಯ ಇಲಾಖೆ ನೀಡುತ್ತಿದ್ದು, ಇದಕ್ಕೆ ಪರ್ಯಾಯವಾಗಿ ಕಂದಾಯ ಇಲಾಖೆಯು ಅರಣ್ಯ ಇಲಾಖೆಗೆ 500 ಎಕರೆ ಜಾಗ ನೀಡಲಿದೆ. ಈ ಪ್ರಕ್ರಿಯೆಯನ್ನು ಕಾನೂನು ಚೌಕಟ್ಟಿನಲ್ಲಿ ಪೂರ್ಣಗೊಳಿಸುತ್ತೇವೆ. ಈ ಯೋಜನೆಗಳ ಕಾಮಗಾರಿಗೆ ಎದುರಾಗಿರುವ ಸಮಸ್ಯೆಗಳನ್ನು ಅಧಿಕಾರಿಗಳು ಗುರುತಿಸಿದ್ದು, ಅವುಗಳಿಗೆ ಪರಿಹಾರ ಹುಡುಕಲು ಸಭೆಯಲ್ಲಿ ಚರ್ಚಿಸಿದ್ದೇವೆ ಎಂದು ತಿಳಿಸಿದ್ದಾರೆ.

VISTARANEWS.COM


on

Forest department agrees to give 500 acres for yEttina hole project work says DCM DK Shivakumar
Koo

ಬೆಂಗಳೂರು: ಎತ್ತಿನಹೊಳೆ ಕಾಮಗಾರಿಗೆ ಅಡಚಣೆ ಉಂಟುಮಾಡಿರುವ 500 ಎಕರೆ ಜಾಗವನ್ನು ಹಸ್ತಾಂತರಿಸಲು ಅರಣ್ಯ ಇಲಾಖೆ ಒಪ್ಪಿದೆ ಎಂದು ಡಿಸಿಎಂ ಡಿ.ಕೆ. ಶಿವಕುಮಾರ್ (DK Shivakumar) ತಿಳಿಸಿದರು.

ಈ ಯೋಜನೆ ಸಂಬಂಧ ವಿಕಾಸಸೌಧದಲ್ಲಿ ಗುರುವಾರ ಕಂದಾಯ ಸಚಿವ ಕೃಷ್ಣ ಭೈರೇಗೌಡ, ಅರಣ್ಯ ಸಚಿವ ಈಶ್ವರ ಖಂಡ್ರೆ, ದೆಹಲಿಯಲ್ಲಿ ಕರ್ನಾಟಕ ಸರ್ಕಾರದ ವಿಶೇಷ ಪ್ರತಿನಿಧಿ ಟಿ.ಬಿ ಜಯಚಂದ್ರ ಹಾಗೂ ಸಂಬಂಧಪಟ್ಟ ಇಲಾಖೆಗಳ ಪ್ರಮುಖ ಅಧಿಕಾರಿಗಳ ಜತೆ ಸಭೆ ನಡೆಸಿದರು.

ಇದನ್ನೂ ಓದಿ: Maruti Suzuki: ಮಾರುತಿ ಸುಜುಕಿ ಸಿಎನ್‌ಜಿ ವಾಹನದ ಟೀಸರ್ ಔಟ್‌; ಹಲವು ವೈಶಿಷ್ಟ್ಯಗಳ ನಿರೀಕ್ಷೆ

ಸಭೆಯ ಬಳಿಕ ಮಾಧ್ಯಮಗಳಿಗೆ ಮಾಹಿತಿ ನೀಡಿದ ಡಿ.ಕೆ. ಶಿವಕುಮಾರ್, ಎತ್ತಿನಹೊಳೆ ಯೋಜನೆ ಹಾಗೂ ಭದ್ರಾ ಮೇಲ್ದಂಡೆ ಯೋಜನೆಗೆ ಸಂಬಂಧಿಸಿದ ಕೆಲಸ ತ್ವರಿತ ಗತಿಯಲ್ಲಿ ನಡೆಸಲು ಅರಣ್ಯ ಸಚಿವ ಈಶ್ವರ ಖಂಡ್ರೆ, ದೆಹಲಿ ಪ್ರತಿನಿಧಿ ಟಿ.ಬಿ ಜಯಚಂದ್ರ, ಕಂದಾಯ, ಅರಣ್ಯ, ನೀರಾವರಿ ಇಲಾಖೆ ಅಧಿಕಾರಿಗಳ ಜತೆ ಇಂದು ಚರ್ಚೆ ಮಾಡಿದ್ದೇವೆ ಎಂದರು.

ಈ ಯೋಜನೆಗೆ ಅಗತ್ಯವಿರುವ ಜಾಗವನ್ನು ಅರಣ್ಯ ಇಲಾಖೆ ನೀಡುತ್ತಿದ್ದು, ಇದಕ್ಕೆ ಪರ್ಯಾಯವಾಗಿ ಕಂದಾಯ ಇಲಾಖೆಯು ಅರಣ್ಯ ಇಲಾಖೆಗೆ 500 ಎಕರೆ ಜಾಗ ನೀಡಲಿದೆ. ಈ ಪ್ರಕ್ರಿಯೆಯನ್ನು ಕಾನೂನು ಚೌಕಟ್ಟಿನಲ್ಲಿ ಪೂರ್ಣಗೊಳಿಸುತ್ತೇವೆ ಎಂದ ಅವರು, ಈ ಯೋಜನೆಗಳ ಕಾಮಗಾರಿಗೆ ಎದುರಾಗಿರುವ ಸಮಸ್ಯೆಗಳನ್ನು ಅಧಿಕಾರಿಗಳು ಗುರುತಿಸಿದ್ದು, ಅವುಗಳಿಗೆ ಪರಿಹಾರ ಹುಡುಕಲು ಸಭೆಯಲ್ಲಿ ಚರ್ಚಿಸಿದ್ದೇವೆ ಎಂದು ತಿಳಿಸಿದರು.

260 ಕಿ.ಮೀ ಉದ್ಧದ 20 ಸ್ಥಳಗಳಲ್ಲಿ ಅರಣ್ಯ ಇಲಾಖೆಗೆ ಸಂಬಂಧಿಸಿದ ಸಮಸ್ಯೆಗಳು ಇವೆ. ಈ ಯೋಜನೆಗೆ ಅರಣ್ಯ ಇಲಾಖೆ ಅನುಮತಿ ಅಗತ್ಯವಿದ್ದ ಕಾರಣ ನಮ್ಮ ಅರಣ್ಯ ಸಚಿವರು ಹಾಗೂ ಇಲಾಖೆ ಸಚಿವರ ಜತೆ ಚರ್ಚೆ ಮಾಡಿದ್ದೇವೆ. ಈ ವಿಚಾರವಾಗಿ ಕಂದಾಯ, ನೀರಾವರಿ ಹಾಗೂ ಅರಣ್ಯ ಇಲಾಖೆ ಸೇರಿ ಒಟ್ಟಾಗಿ ಜಂಟಿ ಸರ್ವೇ ಮಾಡುತ್ತಿದ್ದೇವೆ. ಅರಣ್ಯ ಇಲಾಖೆಗೆ ಬದಲಿ ಜಮೀನು ನೀಡಲು ಕಂದಾಯ ಇಲಾಖೆ ಒಪ್ಪಿದೆ. ಕೂಡಲೇ ಈ ಕಾಮಗಾರಿ ನಡೆಸಲು ಮನವಿ ಮಾಡಿದ್ದೇವೆ ಎಂದು ಹೇಳಿದರು.

ಈ ಮಧ್ಯೆ ಕೆಲವು ಜಾಗದಲ್ಲಿ ರೈತರಿಗೆ 51 ಕೋಟಿ ನೀಡಬೇಕಾಗಿದೆ. ಈ ಪೈಕಿ 10 ಕೋಟಿ ಹಣ ನೀಡಲಾಗಿದ್ದು, 41 ಕೋಟಿ ಬಾಕಿ ಇದೆ. ಈ ಜಾಗದ ವಿಚಾರವಾಗಿ ಅರಣ್ಯ ಇಲಾಖೆ ಹಾಗೂ ಕಂದಾಯ ಇಲಾಖೆ ನಡುವೆ ಗೊಂದಲವಿದೆ. ಹೀಗಾಗಿ ಈ ವಿಚಾರವನ್ನು ಸಚಿವ ಸಂಪುಟ ಸಭೆಯಲ್ಲಿ ಚರ್ಚೆ ಮಾಡಲಾಗುವುದು ಎಂದರು.

ಇದನ್ನೂ ಓದಿ: Namma Clinic: ಬಸ್‌ ನಿಲ್ದಾಣ ಸೇರಿದಂತೆ 254 ಕಡೆ ʼನಮ್ಮ ಕ್ಲಿನಿಕ್‌ʼ ಸ್ಥಾಪನೆ

ಇನ್ನು ದೊಡ್ಡಬಳ್ಳಾಪುರದ ಲಕ್ಕೇನಹಳ್ಳಿಯಲ್ಲಿ ಸಮತೋಲಿತ ಜಲಾನಯನ ಯೋಜನೆ ಬಾಕಿ ಇದ್ದು ಇದರ ಕಾಮಗಾರಿ ಆರಂಭಿಸಲು ತಯಾರಿ ಮಾಡಲಾಗಿದೆ. ಮುಂದಿನ ತಿಂಗಳ ಒಳಗಾಗಿ ನೀರನ್ನು ಹೊರತರಲು ನಿರ್ದೇಶನ ನೀಡಲಾಗಿದೆ. ಮೊದಲ ಹಂತದಲ್ಲಿ 48 ಕಿ.ಮೀ ನೀರು ಹರಿಸುವಂತೆ ಸೂಚನೆ ನೀಡಲಾಗಿದೆ. ಈ ಯೋಜನೆಯಿಂದ ಮತ್ತಷ್ಟು ಪ್ರಯೋಜನ ಪಡೆಯುವ ಉದ್ದೇಶದೊಂದಿಗೆ ಇದರ ಜತೆಗೆ ಸಮುದ್ರಕ್ಕೆ ಸೇರುತ್ತಿರುವ ನೀರನ್ನು ಹೇಗೆ ಎಲ್ಲೆಲ್ಲಿ ನಾವು ಹಿಡಿದಿಟ್ಟು ಬಳಸಿಕೊಳ್ಳಬಹುದು ಎಂಬುದರ ಬಗ್ಗೆ ಅಧ್ಯಯನ ನಡೆಸಲು ಉನ್ನತ ಮಟ್ಟದ ತಾಂತ್ರಿಕ ಸಮಿತಿ ರಚಿಸಲಿದ್ದೇವೆ ಎಂದು ತಿಳಿಸಿದರು.

ಯಡಿಯೂರಪ್ಪ ಪ್ರಕರಣದ ಮಾಹಿತಿ ಇಲ್ಲ:

ಪೋಕ್ಸೋ ಪ್ರಕರಣದಡಿ ಮಾಜಿ ಸಿಎಂ ಯಡಿಯೂರಪ್ಪ ಅವರ ಬಂಧನಕ್ಕೆ ಕೋರ್ಟ್ ವಾರೆಂಟ್ ಜಾರಿ ಮಾಡಿರುವ ಬಗ್ಗೆ ಕೇಳಿದಾಗ, ನಾನು ಸಭೆಯಲ್ಲಿದ್ದ ಕಾರಣ, ನನಗೆ ಹೆಚ್ಚಿನ ಮಾಹಿತಿ ಇಲ್ಲ. ಗೃಹ ಸಚಿವಾಲಯ ಈ ವಿಚಾರವನ್ನು ನಿಭಾಯಿಸಲಿದೆ ಎಂದರು.

ದರ್ಶನ್‌ ಪ್ರಕರಣ ಮುಚ್ಚಿಹಾಕಲು ಯಾರೂ ಸಂಪರ್ಕಿಸಿಲ್ಲ:

ದರ್ಶನ್ ಪ್ರಕರಣದಲ್ಲಿ ಪೊಲೀಸ್ ಠಾಣೆಯನ್ನು ಶಾಮಿಯಾನ ಮೂಲಕ ಮುಚ್ಚಲಾಗಿದೆ. ಈ ಪ್ರಕರಣದಲ್ಲಿ ಸತ್ಯಾಂಶ ಮರೆಮಾಚುವ ಪ್ರಯತ್ನ ನಡೆಯುತ್ತಿದೆಯೇ ಎಂಬ ಪ್ರಶ್ನೆಗೆ, ನನ್ನ ಪ್ರಕರಣದ ಅನುಭವದಲ್ಲೇ ಹೇಳುವುದಾದರೆ, ಅಧಿಕಾರಿಗಳು ನನ್ನನ್ನು ನ್ಯಾಯಾಲಯಕ್ಕೆ ಕರೆದುಕೊಂಡು ಹೋಗುವಾಗ ಜನರಿಗೆ ಮರೆಮಾಚಿ ಕರೆದುಕೊಂಡು ಹೋಗುವರು. ಕೆಲವು ಬಾರಿ ಅಭಿಮಾನಿಗಳು ಅಡ್ಡಬರುವುದು, ಜೈಕಾರ ಕೂಗುವುದು ಅಥವಾ ಯಾರಾದರೂ ಕಲ್ಲು ಎಸೆಯಬಹುದು ಎಂಬ ಕಾರಣಕ್ಕೆ ಪೊಲೀಸ್ ಅಧಿಕಾರಿಗಳು ಆ ರೀತಿ ಮಾಡುತ್ತಾರೆ. ಈ ಪ್ರಕರಣದಲ್ಲಿ ಪೊಲೀಸರು ಇದೇ ರೀತಿ ಮುನ್ನಚ್ಚರಿಕೆ ಕ್ರಮ ತೆಗೆದುಕೊಂಡಿರಬಹುದು. ನನಗೆ ಮಾಹಿತಿ ಇಲ್ಲ ಎಂದು ತಿಳಿಸಿದರು.

ದರ್ಶನ್‌ ಪ್ರಕರಣ ಮುಚ್ಚಿಹಾಕಲು ನಿಮ್ಮ ಸಚಿವರು ಯಾರಾದರೂ ಒತ್ತಡ ಹಾಕಿದ್ದಾರಾ ಎಂಬ ಪ್ರಶ್ನೆಗೆ “ಈ ವಿಚಾರವಾಗಿ ನನ್ನ ಬಳಿ ಯಾರೂ ಮಾತನಾಡಿಲ್ಲ. ನನಗೆ ಅಷ್ಟಾಗಿ ಸಂಪರ್ಕವಿಲ್ಲ. ಸಚಿವರ ಪ್ರಯತ್ನದ ಬಗ್ಗೆ ನಿಮ್ಮಿಂದ ಮಾಹಿತಿ ಬಂದಿದೆ. ಈ ಬಗ್ಗೆ ವಿಚಾರಿಸುತ್ತೇನೆ ಎಂದರು.

ಇದನ್ನೂ ಓದಿ: ATM Cash Withdrawal Fee: ಎಟಿಎಂ ನಗದು ಹಿಂಪಡೆಯುವಿಕೆ ಶುಲ್ಕ 21 ರೂ.ಗೆ ಏರಿಕೆ?

ಈ ಪ್ರಕರಣ ರಾಜ್ಯ ಸರ್ಕಾರ ಮುಚ್ಚಿಹಾಕಲು ಪ್ರಯತ್ನಿಸಿದರೆ ನಾನು ಮಧ್ಯಪ್ರವೇಶಿಸಬೇಕಾಗುತ್ತದೆ ಎಂಬ ಕುಮಾರಸ್ವಾಮಿ ಅವರ ಎಚ್ಚರಿಕೆ ಬಗ್ಗೆ ಮಾಧ್ಯಮದವರು ಕೇಳಿದಾಗ, ಈಗಲೂ ಅವರು ಮಧ್ಯಪ್ರವೇಶಿಸಲಿ. ಯಾರು ಬೇಕಾದರೂ ಮಧ್ಯಪ್ರವೇಶ ಮಾಡಲಿ ಎಂದರು.

Continue Reading

ಕರ್ನಾಟಕ

ದೇಶದ ಪ್ರತಿ ಜಿಲ್ಲೆಗೂ ಉಗ್ರರ ನೇಮಿಸಲು ಬಳ್ಳಾರಿಯಲ್ಲಿ ಸಂಚು; ಎನ್‌ಐಎ ಚಾರ್ಜ್‌ಶೀಟ್‌ನಲ್ಲಿ ಸ್ಫೋಟಕ ಮಾಹಿತಿ!

ಉಗ್ರರು 2025ರ ವೇಳೆಗೆ ಪ್ರತಿಯೊಂದು ಜಿಲ್ಲೆಯಲ್ಲಿ ಸ್ಲೀಪರ್‌ಸೆಲ್‌ಗಳನ್ನು ನೇಮಿಸುವ ಮೂಲಕ ಕೇಂದ್ರ ಸರ್ಕಾರದ ವಿರುದ್ಧ ಸಮರ ಸಾರುವ ಉದ್ದೇಶ ಹೊಂದಿದ್ದರು. ಧಾರ್ಮಿಕ ಮುಖಂಡರು, ದೇಶದ ಯೋಧರು, ಪೊಲೀಸರು ಸೇರಿ ಹಲವರನ್ನು ಗುರಿಯಾಗಿಸಿಕೊಂಡು ದಾಳಿ ಮಾಡುವ ಉದ್ದೇಶ ಹೊಂದಿದ್ದರು ಎಂದು ತಿಳಿದುಬಂದಿದೆ. ಎಲ್ಲ ಚಟುವಟಿಕೆಗಳಿಗೂ ಉಗ್ರರು ಬಳ್ಳಾರಿಯನ್ನೇ ಪ್ರಮುಖ ಕೇಂದ್ರವನ್ನಾಗಿಸಿಕೊಂಡಿದ್ದರು ಎಂದು ಚಾರ್ಜ್‌ಶೀಟ್‌ ಸಲ್ಲಿಸಲಾಗಿದೆ.

VISTARANEWS.COM


on

ISIS Terrorists
Koo

ಬಳ್ಳಾರಿ: ಗಣಿ ಜಿಲ್ಲೆ ಬಳ್ಳಾರಿಯಲ್ಲಿ ಕುಳಿತು ದೇಶದ ಪ್ರತಿಯೊಂದು ಜಿಲ್ಲೆಯಲ್ಲೂ ಐಸಿಸ್‌ ಉಗ್ರರ ಜಾಲ (Bellary ISIS Module) ರೂಪಿಸಬೇಕು ಎಂದು ಸಂಚು ಹೆಣೆದಿದ್ದ ಏಳು ಶಂಕಿತ ಉಗ್ರರನ್ನು ಬಂಧಿಸಿದ ಎನ್‌ಐಎ ಅಧಿಕಾರಿಗಳು (NIA Officials) ಅವರ ವಿರುದ್ಧ ಚಾರ್ಜ್‌ಶೀಟ್‌ ಸಲ್ಲಿಸಿದ್ದಾರೆ. ಚಾರ್ಜ್‌ಶೀಟ್‌ನಲ್ಲಿ ಪ್ರಸ್ತಾಪವಾಗಿರುವ ವಿಷಯಗಳು ಜನರನ್ನು ಬೆಚ್ಚಿಬೀಳಿಸಿವೆ. ದೇಶದ ಪ್ರತಿಯೊಂದು ಜಿಲ್ಲೆಯಲ್ಲೂ ಯುವಕರನ್ನು ಐಸಿಸ್‌ ಉಗ್ರ ಸಂಘಟನೆಗೆ ನೇಮಿಸಬೇಕು ಎಂಬುದು ಉಗ್ರರ ಉದ್ದೇಶವಾಗಿತ್ತು ಅಂಶವು ಚಾರ್ಜ್‌ಶೀಟ್‌ನಿಂದ (NIA Chargesheet) ಬಯಲಾಗಿದೆ.

ಕರ್ನಾಟಕದಲ್ಲಿ ಬಂಧಿತರಾಗಿದ್ದ ಮೊಹಮ್ಮದ್‌ ಮುನಿರುದ್ದೀನ್‌, ಸೈಯದ್‌ ಅಮೀರ್‌, ಎಂ.ಡಿ.ಮುಜಮಿಲ್‌ ಹಾಗೂ ಮಹಾರಾಷ್ಟ್ರದ ನಾಲ್ವರು ಉಗ್ರರ ವಿರುದ್ಧ ನ್ಯಾಯಾಲಯಕ್ಕೆ ಎನ್‌ಐಎ ಚಾರ್ಜ್‌ಶೀಟ್‌ ಸಲ್ಲಿಸಿದೆ. ದೇಶದ ಪ್ರತಿಯೊಂದು ಜಿಲ್ಲೆಯಲ್ಲೂ 50 ಯುವಕರನ್ನು ಸ್ಲೀಪರ್‌ಸೆಲ್‌ಗಳನ್ನಾಗಿ ನೇಮಕ ಮಾಡಿಕೊಂಡು, ದೇಶಾದ್ಯಂತ ಐಸಿಸ್‌ ಉಗ್ರ ಸಂಘಟನೆಯ ಜಾಲವನ್ನು ವಿಸ್ತರಣೆ ಮಾಡಬೇಕು ಎಂಬುದು ಇವರ ಉದ್ದೇಶವಾಗಿತ್ತು. ಬಳ್ಳಾರಿಯ ಮೂವರು ಹಾಗೂ ಮಹಾರಾಷ್ಟ್ರದ ನಾಲ್ವರು ಶಂಕಿತರು ಇಂತಹ ಸಂಚು ರೂಪಿಸಿದ್ದರು ಎಂದು ಚಾರ್ಜ್‌ಶೀಟ್‌ನಲ್ಲಿ ಉಲ್ಲೇಖಿಸಲಾಗಿದೆ.

Manipur violence

ಐಸಿಸ್‌ ಉಗ್ರ ಸಂಘಟನೆಯ ಸುಲೇಮಾನ್‌ ಅಲಿಯಾಸ್‌ ಮಿನಾಜ್‌ ಎಂಬಾತನಿಂದ ಏಳು ಉಗ್ರರು ಪ್ರತಿಜ್ಞೆ ಪಡೆದುಕೊಂಡಿದ್ದರು. ಭಾರತದಾದ್ಯಂತ ಐಸಿಸ್‌ ಜಾಲವನ್ನು ವಿಸ್ತರಿಸುವುದಾಗಿ ಇವರು ಪ್ರತಿಜ್ಞೆ ಸ್ವೀಕರಿಸಿದ್ದರು. ಐಸಿಸ್‌ ಉಗ್ರ ಸಂಘಟನೆಯ ಜತೆ ನಿರಂತರವಾಗಿ ಇವರು ಸಂಪರ್ಕದಲ್ಲಿದ್ದರು. ಜಿಲ್ಲೆಗಳಲ್ಲಿ ಸ್ಲೀಪರ್ ಸೆಲ್‌ಗಳನ್ನು ಬಳಸಿ ಗೆರಿಲ್ಲಾ ಮಾದರಿಯ ದಾಳಿಗೆ ಷಡ್ಯಂತ್ರ ಮಾಡಿದ್ದರು. ಸುಧಾರಿತ ಸ್ಫೋಟಕ ಸಾಧನಗಳ (IED) ಮೂಲಕ ದಾಳಿ ನಡೆಸುವುದು, ಬಳ್ಳಾರಿಯನ್ನು ಉಗ್ರ ಸಂಘಟನೆಯ ಜಾಲದ ಪ್ರಮುಖ ಕೇಂದ್ರವನ್ನಾಗಿ ರೂಪಿಸುವುದು, ಇಲ್ಲಿಯೇ ಪ್ರಾಯೋಗಿಕವಾಗಿ ಸ್ಫೋಟಿಸುವುದು ಸೇರಿ ಹಲವು ಕುತಂತ್ರಗಳನ್ನು ಹೆಣೆದಿದ್ದರು ಎಂದು ಎನ್‌ಐಎ ಅಧಿಕಾರಿಗಳು ಚಾರ್ಜ್‌ಶೀಟ್‌ನಲ್ಲಿ ಉಲ್ಲೇಖಿಸಿದ್ದಾರೆ.

ಬಂಧಿತ ಉಗ್ರರು 2025ರ ವೇಳೆಗೆ ಪ್ರತಿಯೊಂದು ಜಿಲ್ಲೆಯಲ್ಲಿ ಸ್ಲೀಪರ್‌ಸೆಲ್‌ಗಳನ್ನು ನೇಮಿಸುವ ಮೂಲಕ ಕೇಂದ್ರ ಸರ್ಕಾರದ ವಿರುದ್ಧ ಸಮರ ಸಾರುವ ಉದ್ದೇಶ ಹೊಂದಿದ್ದರು. ಧಾರ್ಮಿಕ ಮುಖಂಡರು, ದೇಶದ ಯೋಧರು, ಪೊಲೀಸರು ಸೇರಿ ಹಲವರನ್ನು ಗುರಿಯಾಗಿಸಿಕೊಂಡು ದಾಳಿ ಮಾಡುವ ಉದ್ದೇಶ ಹೊಂದಿದ್ದರು ಎಂದು ತಿಳಿದುಬಂದಿದೆ. ಇವರ ಬಳಿಯಿಂದ ಹಲವು ಡಿವೈಸ್‌ಗಳ ಜತೆಗೆ ಜಿಹಾದ್‌ ಕುರಿತ ಪುಸ್ತಕಗಳನ್ನೂ ವಶಪಡಿಸಿಕೊಳ್ಳಲಾಗಿದೆ ಎಂದು ತಿಳಿದುಬಂದಿದೆ.

ಇದನ್ನೂ ಓದಿ: NIA Raid: ಮಧ್ಯಪ್ರದೇಶದಲ್ಲಿ ಐಸಿಸ್‌ ಉಗ್ರರ ಜಾಲ ಬಯಲು; ಮಸೀದಿಗಳಲ್ಲೇ ಸಂಚು ರೂಪಿಸುತ್ತಿದ್ದ ಮೂವರ ಬಂಧನ

Continue Reading

ಕರ್ನಾಟಕ

Actress Ramya: ಕಾನೂನಿಗಿಂತ ಯಾರೂ ದೊಡ್ಡೋರಲ್ಲ; ದರ್ಶನ್‌ಗೆ ಮತ್ತೆ ನಟಿ ರಮ್ಯಾ ಕ್ಲಾಸ್!

Actress Ramya: ಕಾನೂನಿನ ಮುಂದೆ ಎಲ್ಲರೂ ಸಮಾನರು. ಕಾನೂನಿಗಿಂತ ಯಾರು ದೊಡ್ಡವರಲ್ಲ. ಹಾಗಾಗಿ, ಯಾರೂ ಕಾನೂನನ್ನು ಕೈಗೆತ್ತಿಕೊಳ್ಳಬಾರದು. ನೀವು ಯಾರನ್ನೋ ಕೊಲ್ಲಬಾರದು. ನೀವು ನ್ಯಾಯಾಂಗದ ಮೇಲೆ ನಂಬಿಕೆ ಇಟ್ಟಿದ್ದೇ ಆದರೆ, ಒಂದು ದೂರು ದಾಖಲಿಸಿ ಅಷ್ಟೆ ಎಂಬುದಾಗಿ ನಟಿ ರಮ್ಯಾ ಅವರು ಪೋಸ್ಟ್‌ ಮಾಡಿದ್ದಾರೆ. ಆ ಮೂಲಕ ಕೊಲೆ ಆರೋಪ ಹೊತ್ತಿರುವ ದರ್ಶನ್‌ ಅವರಿಗೆ ಕ್ಲಾಸ್‌ ತೆಗೆದುಕೊಂಡಿದ್ದಾರೆ.

VISTARANEWS.COM


on

Actress Ramya
Koo

ಬೆಂಗಳೂರು: ಗೆಳತಿ ಪವಿತ್ರಾ ಗೌಡ (Pavithra Gowda) ಅವರಿಗೆ ಅಶ್ಲೀಲವಾಗಿ ಮೆಸೇಜ್‌ ಮಾಡಿದ ರೇಣುಕಾಚಾರ್ಯ ಎಂಬ ಯುವಕನ ಕೊಲೆ ಪ್ರಕರಣದಲ್ಲಿ ನಟ ದರ್ಶನ್‌ (Actor Darshan), ಪವಿತ್ರಾ ಗೌಡ ಸೇರಿ ಹಲವರನ್ನು ಪೊಲೀಸರು ಬಂಧಿಸಿದ್ದಾರೆ. ದರ್ಶನ್‌ ವಿರುದ್ಧ ರಾಜ್ಯಾದ್ಯಂತ ಜನಾಕ್ರೋಶ ವ್ಯಕ್ತವಾಗುತ್ತಿದೆ. ಇನ್ನು, ಪ್ರಕರಣಕ್ಕೆ ಸಂಬಂಧಿಸಿದಂತೆ ಸ್ಯಾಂಡಲ್‌ವುಡ್‌ ಕ್ವೀನ್‌ ರಮ್ಯಾ (Actress Ramya) ಅವರು ನಟನ ವಿರುದ್ಧ ಆಕ್ರೋಶ ಮುಂದುವರಿಸಿದ್ದಾರೆ. ಈಗ ಮತ್ತೆ ಇನ್‌ಸ್ಟಾಗ್ರಾಂ ಸ್ಟೋರಿ ಮೂಲಕ ದರ್ಶನ್‌ಗೆ ಕ್ಲಾಸ್‌ ತೆಗೆದುಕೊಂಡಿರುವ ಅವರು, “ಕಾನೂನಿಗಿಂತ ಯಾರೂ ದೊಡ್ಡವರಲ್ಲ” ಎಂದು ಹೇಳಿದ್ದಾರೆ.

“ಸಾಮಾಜಿಕ ಜಾಲತಾಣದಲ್ಲಿ ಸರಿಯಾದ ಉದ್ದೇಶದಿಂದಾಗಿಯೇ ಬ್ಲಾಕ್‌ ಎಂಬ ಆಯ್ಕೆಯನ್ನು ನೀಡಲಾಗಿದೆ. ಅತಿರೇಕದ ಟ್ರೋಲ್‌ ಮಾಡಿದಾಗ ನೀವು ದೂರು ನೀಡಬಹುದು. ಅತಿ ಕೆಟ್ಟ ಭಾಷೆಯನ್ನು ಬಳಸಿ ನನ್ನ ಬಗ್ಗೆಯೂ ಟ್ರೋಲ್‌ ಮಾಡಿದ್ದಾರೆ. ಬೇರೆ ನಟರ ಬಗ್ಗೆಯೂ ಟ್ರೋಲ್‌ ಮಾಡಿದ್ದಾರೆ. ಟ್ರೋಲ್‌ ಮಾಡುವವರು ಬೇರೆಯವರ ಹೆಂಡತಿಯರು ಹಾಗೂ ಮಕ್ಕಳನ್ನೂ ಬಿಟ್ಟಿಲ್ಲ. ಇಂತಹ ಕೆಟ್ಟ ಸಮಾಜದಲ್ಲಿ ನಾವು ಬದುಕುತ್ತಿದ್ದೇವೆ. ನಾನೇ ಒಂದಷ್ಟು ಟ್ರೋಲಿಗರ ವಿರುದ್ಧ ಕೇಸ್‌ ದಾಖಲಿಸಿದ್ದೇನೆ. ದೇಶದ ಭವಿಷ್ಯಕ್ಕೆ ಮುನ್ನುಡಿ ಬರೆಯುವ ಇವರು ಸಾಮಾಜಿಕ ಜಾಲತಾಣದಲ್ಲಿ ಹೀಗೇಕೆ ಸಮಯ ಹಾಳು ಮಾಡುತ್ತಿದ್ದಾರೆ? ಅವರ ಭವಿಷ್ಯದ ಮೇಲೆಯೇ ಏಕೆ ಕಲ್ಲು ಹಾಕೊಳ್ಳುತ್ತಿದ್ದಾರೆ ಎಂಬುದಾಗಿ ಅನಿಸಿದ್ದಿದೆ” ಎಂದು ರಮ್ಯಾ ಇನ್‌ಸ್ಟಾಗ್ರಾಂ ಸ್ಟೋರಿ ಹಂಚಿಕೊಂಡಿದ್ದಾರೆ.

ಕಾನೂನಿಗಿಂತ ದೊಡ್ಡವರು ಯಾರೂ ಇಲ್ಲ

“ಕಾನೂನಿನ ಮುಂದೆ ಎಲ್ಲರೂ ಸಮಾನರು. ಕಾನೂನಿಗಿಂತ ಯಾರು ದೊಡ್ಡವರಲ್ಲ. ಹಾಗಾಗಿ, ಯಾರೂ ಕಾನೂನನ್ನು ಕೈಗೆತ್ತಿಕೊಳ್ಳಬಾರದು. ನೀವು ಯಾರನ್ನೋ ಕೊಲ್ಲಬಾರದು. ನೀವು ನ್ಯಾಯಾಂಗದ ಮೇಲೆ ನಂಬಿಕೆ ಇಟ್ಟಿದ್ದೇ ಆದರೆ, ಒಂದು ದೂರು ದಾಖಲಿಸಿ ಅಷ್ಟೆ. ಹಾಗೆಯೇ, ಥ್ಯಾಂಕ್‌ಲೆಸ್‌ ಜಾಬ್‌ ಮಾಡುತ್ತಿರುವ ಪೊಲೀಸರ ಅವಿರತ ಶ್ರಮವನ್ನೂ ನಾವು ಸ್ಮರಿಸಬೇಕಿದೆ ಹಾಗೆಯೇ, ಯಾವುದೇ ರಾಜಕೀಯ ಒತ್ತಡಕ್ಕೆ ಸಿಲುಕದೆ ಪೊಲೀಸರು ಕಾರ್ಯ ನಿರ್ವಹಿಸುತ್ತಾರೆ ಎಂಬ ವಿಶ್ವಾಸವಿದೆ” ಎಂದು ರಮ್ಯಾ ಪೋಸ್ಟ್‌ ಮಾಡಿದ್ದಾರೆ. ಹಾಗೆಯೇ, ಜಸ್ಟಿಸ್‌ ಫಾರ್‌ ರೇಣುಕಾಸ್ವಾಮಿ, ದರ್ಶನ್‌, ಯಡಿಯೂರಪ್ಪ ಹಾಗೂ ಪ್ರಜ್ವಲ್‌ ರೇವಣ್ಣ ಎಂಬ ಹ್ಯಾಶ್‌ಟ್ಯಾಗ್‌ಅನ್ನೂ ಬಳಸಿದ್ದಾರೆ.

ನಟ ದರ್ಶನ್​ಗೆ ಮರಣದಂಡನೆಯಾಗಲಿ ಎಂಬ ಆಶಯವನ್ನು ಇದಕ್ಕೂ ಮೊದಲು ರಮ್ಯಾ ವ್ಯಕ್ತಪಡಿಸಿದ್ದರು. ಕೊಲೆ ಪ್ರಕರಣದ ಕುರಿತು ಎಕ್ಸ್​ನಲ್ಲಿ ಪೋಸ್ಟ್​​ ಮಾಡಿರುವ ರಮ್ಯಾ ಐಪಿಸಿ ಸೆಕ್ಷನ್​ 302ರನ್ನು ಉಲ್ಲೇಖಿಸಿ ಅದರ ಅನ್ವಯ ದರ್ಶನ್​ಗೆ ಕಠಿಣ ಶಿಕ್ಷೆಯಾಗಬಹುದು ಎಂದು ಅಭಿಪ್ರಾಯಪಟ್ಟಿದ್ದರು. ಕೊಲೆಯಾಗಿರುವ ವ್ಯಕ್ತಿಯ ಪರವಾಗಿ ನಿಂತಿರುವ ರಮ್ಯಾ, ದರ್ಶನ್​ಗೆ ಇಂಡಿಯನ್ ಪಿನಲ್​ ಕೋಡ್​ 302ರ ಪ್ರಕಾರ ಯಾವ ಪ್ರಕಾರಣದ ಶಿಕ್ಷೆಯಾಗುತ್ತದೆ ಎಂಬ ಬಗ್ಗೆ ರಿಪೋಸ್ಟ್ ಮಾಡಿದ್ದರು. ಈ ಸೆಕ್ಷನ್​ 302ರಲ್ಲಿ ಕೊಲೆ ಆರೋಪ ಸಾಬೀತಾದರೆ ಅವರಿಗೆ ಮರಣದಂಡನೆ ಅಥವಾ ಜೀವಾವಧಿ ಶಿಕ್ಷೆ ವಿಧಿಸಲಾಗುತ್ತದೆ ಎಂಬ ಮಾಹಿತಿ ಇರುವ ಪೋಸ್ಟ್‌ ಅನ್ನು ರಮ್ಯಾ ರಿಪೋಸ್ಟ್ ಮಾಡಿದ್ದರು. ಮತ್ತೊಂದು ಪೋಸ್ಟ್‌ನಲ್ಲಿ ಅವರು, “ಯಾರೇ ಆದ್ರೂ ನ್ಯಾಯ ಎತ್ತಿ ಹಿಡಿಯಬೇಕು” ಎಂದು ಬರೆದುಕೊಂಡಿದ್ದರು.

ಇದನ್ನೂ ಓದಿ: Actor Darshan: ಯಾರೇ ಆದ್ರೂ ನ್ಯಾಯ ಎತ್ತಿ ಹಿಡಿಯಬೇಕು; ದರ್ಶನ್ ವಿರುದ್ಧ ನಟಿ ರಮ್ಯಾ ಮತ್ತೊಂದು ಟ್ವೀಟ್‌!

Continue Reading

ಕರ್ನಾಟಕ

Namma Clinic: ಬಸ್‌ ನಿಲ್ದಾಣ ಸೇರಿದಂತೆ 254 ಕಡೆ ʼನಮ್ಮ ಕ್ಲಿನಿಕ್‌ʼ ಸ್ಥಾಪನೆ

Namma Clinic: ಪ್ರಸಕ್ತ ಸಾಲಿನಲ್ಲಿ ಹೊಸದಾಗಿ 254 ನಮ್ಮ ಕ್ಲಿನಿಕ್‌ಗಳನ್ನು ಪ್ರಾರಂಭಿಸಲು ಅವಕಾಶವಿದ್ದು, ಸ್ಥಳ ಗುರುತಿಸುವ ಕಾರ್ಯ ಶೀಘ್ರದಲ್ಲಿ ಪೂರ್ಣಗೊಳಿಸಬೇಕು ಹಾಗೂ ಸ್ಥಳ ಗುರುತಿಸುವ ವೇಳೆ ಸಾರ್ವಜನಿಕ ಸ್ಥಳಗಳಲ್ಲಿ ಆದ್ಯತೆ ನೀಡುವಂತೆ ಎಂದು ಆರೋಗ್ಯ ಸಚಿವ ದಿನೇಶ್ ಗುಂಡೂರಾವ್ ಅಧಿಕಾರಿಗಳಿಗೆ ಸೂಚನೆ ನೀಡಿದ್ದಾರೆ

VISTARANEWS.COM


on

Namma Clinic
Koo

ಬೆಂಗಳೂರು: ಬಸ್ ನಿಲ್ದಾಣಗಳು ಸೇರಿದಂತೆ (Namma Clinic) ಸಾರ್ವಜನಿಕ ಸ್ಥಳಗಳಲ್ಲಿ ʼನಮ್ಮ ಕ್ಲಿನಿಕ್‌ʼಗಳನ್ನು ಪ್ರಾರಂಭಿಸಲು ರಾಜ್ಯ ಸರ್ಕಾರ ನಿರ್ಧರಿಸಿದೆ ಎಂದು ಆರೋಗ್ಯ ಸಚಿವ ದಿನೇಶ್ ಗುಂಡೂರಾವ್ ತಿಳಿಸಿದ್ದಾರೆ.

ಆರೋಗ್ಯ ಇಲಾಖೆ ಅಧಿಕಾರಿಗಳೊಂದಿಗೆ ಗುರುವಾರ ವಿವಿಧ ಆರೋಗ್ಯ ಯೋಜನೆಗಳ ಪ್ರಗತಿ ಪರಿಶೀಲನೆ ನಡೆಸಿದ ಸಚಿವರು, ನೂತನ ನಮ್ಮ ಕ್ಲಿನಿಕ್‌ಗಳನ್ನು ಪ್ರಾರಂಭಿಸುವ ನಿಟ್ಟಿನಲ್ಲಿ ಸ್ಥಳ ಗುರುತಿಸಿ 15 ದಿನಗಳ ಒಳಗಾಗಿ ವರದಿ ಸಲ್ಲಿಸುವಂತೆ ಅಧಿಕಾರಿಗಳಿಗೆ ಸೂಚನೆ ನೀಡಿದರು.

ರಾಜ್ಯದಲ್ಲಿ ಕಾರ್ಯನಿರ್ವಹಿಸುತ್ತಿರುವ 503 ನಮ್ಮ ಕ್ಲಿನಿಕ್‌ಗಳನ್ನು ಸದೃಢಗೊಳಿಸುವತ್ತ ಗಮನ ಹರಿಸಬೇಕು. ಪ್ರಸಕ್ತ ಸಾಲಿನಲ್ಲಿ ಹೊಸದಾಗಿ 254 ನಮ್ಮ ಕ್ಲಿನಿಕ್‌ಗಳನ್ನು ಪ್ರಾರಂಭಿಸಲು ಅವಕಾಶವಿದ್ದು, ಸ್ಥಳ ಗುರುತಿಸುವ ಕಾರ್ಯ ಶೀಘ್ರದಲ್ಲಿ ಪೂರ್ಣಗೊಳಿಸಬೇಕು ಎಂದು ಸೂಚನೆ ನೀಡಿದ್ದಾರೆ.

ಇದನ್ನೂ ಓದಿ: Glasses or Lenses?: ಕನ್ನಡಕವೋ ಕಾಂಟ್ಯಾಕ್ಟ್‌ ಲೆನ್ಸ್‌ ಬೇಕೋ? ಇದನ್ನು ಓದಿ, ನೀವೇ ನಿರ್ಧರಿಸಿ!

ಸ್ಥಳ ಗುರುತಿಸುವ ಸಂದರ್ಭದಲ್ಲಿ ಸಾರ್ವಜನಿಕ ಸ್ಥಳಗಳಲ್ಲಿ ಆದ್ಯತೆ ನೀಡುವಂತೆ ತಿಳಿಸಿದ ಸಚಿವರು, ವಿಶೇಷವಾಗಿ ಜೈಲುಗಳು ಹಾಗೂ ಬಸ್ ನಿಲ್ದಾಣಗಳಲ್ಲಿ, ನಮ್ಮ ಕ್ಲಿನಿಕ್‌ಗಳನ್ನ ಆರಂಭಿಸುವ ಕುರಿತು ಸ್ಥಳ ಗುರುತಿಸುವ ಕಾರ್ಯ 15 ದಿನಗಳ ಒಳಗಾಗಿ ಪೂರ್ಣಗೊಳಿಸಿ ಕ್ಯಾಬಿನೆಟ್ ಒಪ್ಪಿಗೆ ಪಡೆಯುವ ನಿಟ್ಟಿನಲ್ಲಿ ಕಾರ್ಯಪ್ರವೃತ್ತರಾಗುವಂತೆ ಇಲಾಖೆ ಪ್ರಧಾನ ಕಾರ್ಯದರ್ಶಿ ಅನೀಲ್ ಕುಮಾರ್ ಎನ್.ಎಚ್.ಎಂ ಎಂ.ಡಿ ನವೀನ್ ಭಟ್ ಹಾಗೂ ಆರೋಗ್ಯ ಇಲಾಖೆ ಆಯುಕ್ತ ರಂದೀಪ್ ಅವರಿಗೆ ಸೂಚಿಸಿದರು.

15 ನೇ ಹಣಕಾಸಿನಲ್ಲಿ ಆರೋಗ್ಯ ಯೋಜನೆಗಳ ಸ್ಥಿತಿಗತಿಗಳ ಕುರಿತು ಹಿರಿಯ ಆರೋಗ್ಯ ಅಧಿಕಾರಿಗಳೊಂದಿಗೆ ಚರ್ಚೆ ನಡೆಸಿದ ಸಚಿವರು, ಯೋಜನೆಗಳ ಶೀಘ್ರ ಕಾರ್ಯಗತಗೊಳ್ಳುವ ನಿಟ್ಟಿನಲ್ಲಿ ಹೆಚ್ಚಿನ ಗಮನ ಹರಿಸಬೇಕಾಗಿದೆ. ವಿಳಂಬ ನೀತಿಯನ್ನು ಅನುಸರಿಸುವ ಅಧಿಕಾರಿಗಳ ವಿರುದ್ಧ ಕ್ರಮ ಕೈಗೊಳ್ಳುಬೇಕಾಗುತ್ತದೆ ಎಂದು ಎಚ್ಚರಿಕೆ ನೀಡಿದರು.

ಇದನ್ನೂ ಓದಿ: SSLC Examination 2 : 700ಕ್ಕೂ ಹೆಚ್ಚು ಕೇಂದ್ರಗಳಲ್ಲಿ ನಾಳೆಯಿಂದ ಎಸ್‌ಎಸ್‌ಎಲ್‌ಸಿ ಪರೀಕ್ಷೆ-2 ಶುರು

ಪ್ರಾಥಮಿಕ ಆರೋಗ್ಯ ಕೇಂದ್ರಗಳ ಕಟ್ಟಡ ದುರಸ್ತಿ ಕಾರ್ಯಗಳು, ಆಸ್ಪತ್ರೆಗಳ ಮೂಲಸೌಕರ್ಯ ಅಭಿವೃದ್ಧಿಪಡಿಸುವ ನಿಟ್ಟಿನಲ್ಲಿ 15ನೇ ಹಣಕಾಸಿನಲ್ಲಿ ಸಿಗುವ ಅನುದಾನವನ್ನು ಸಂಪೂರ್ಣವಾಗಿ ಸದುಪಯೋಗ ಪಡಿಸಿಕೊಳ್ಳಬೇಕು ಎಂದು ಇದೇ ವೇಳೆ ಆರೋಗ್ಯ ಸಚಿವರು ಅಧಿಕಾರಿಗಳಿಗೆ ಸೂಚಿಸಿದರು.

Continue Reading
Advertisement
Jammu Kashmir
ದೇಶ2 hours ago

Jammu Kashmir: ಕಾಶ್ಮೀರದಲ್ಲಿ ಮತ್ತೊಂದು ದುರಂತ; ಸೇನಾ ವಾಹನ ಕಣಿವೆಗೆ ಬಿದ್ದು ಯೋಧ ಸಾವು, ನಾಲ್ವರಿಗೆ ಗಾಯ

Forest department agrees to give 500 acres for yEttina hole project work says DCM DK Shivakumar
ಕರ್ನಾಟಕ2 hours ago

DK Shivakumar: ಎತ್ತಿನಹೊಳೆ ಕಾಮಗಾರಿಗೆ 500 ಎಕರೆ ನೀಡಲು ಅರಣ್ಯ ಇಲಾಖೆ ಒಪ್ಪಿಗೆ

Maharaj
ಸಿನಿಮಾ3 hours ago

Maharaj: ಹಿಂದುಗಳಿಗೆ ಅವಮಾನ; ಆಮೀರ್‌ ಖಾನ್‌ ಪುತ್ರನ ‘ಮಹಾರಾಜ್’‌ ಸಿನಿಮಾ ಬಿಡುಗಡೆಗೆ ಕೋರ್ಟ್‌ ತಡೆ

ISIS Terrorists
ಕರ್ನಾಟಕ4 hours ago

ದೇಶದ ಪ್ರತಿ ಜಿಲ್ಲೆಗೂ ಉಗ್ರರ ನೇಮಿಸಲು ಬಳ್ಳಾರಿಯಲ್ಲಿ ಸಂಚು; ಎನ್‌ಐಎ ಚಾರ್ಜ್‌ಶೀಟ್‌ನಲ್ಲಿ ಸ್ಫೋಟಕ ಮಾಹಿತಿ!

Actress Ramya
ಕರ್ನಾಟಕ5 hours ago

Actress Ramya: ಕಾನೂನಿಗಿಂತ ಯಾರೂ ದೊಡ್ಡೋರಲ್ಲ; ದರ್ಶನ್‌ಗೆ ಮತ್ತೆ ನಟಿ ರಮ್ಯಾ ಕ್ಲಾಸ್!

Namma Clinic
ಕರ್ನಾಟಕ5 hours ago

Namma Clinic: ಬಸ್‌ ನಿಲ್ದಾಣ ಸೇರಿದಂತೆ 254 ಕಡೆ ʼನಮ್ಮ ಕ್ಲಿನಿಕ್‌ʼ ಸ್ಥಾಪನೆ

Maruti Suzuki
ಆಟೋಮೊಬೈಲ್5 hours ago

Maruti Suzuki: ಮಾರುತಿ ಸುಜುಕಿ ಸಿಎನ್‌ಜಿ ವಾಹನದ ಟೀಸರ್ ಔಟ್‌; ಹಲವು ವೈಶಿಷ್ಟ್ಯಗಳ ನಿರೀಕ್ಷೆ

Reliance Retail Tira unveils skin care brand Akind
ದೇಶ6 hours ago

Reliance Retail: ಚರ್ಮ ರಕ್ಷಣೆಯ ʼಅಕೈಂಡ್ʼ ಬ್ರಾಂಡ್‌ನ ಕ್ರೀಮ್‌ ಬಿಡುಗಡೆ

Union Budget 2024
ದೇಶ6 hours ago

Union Budget 2024: ಮೋದಿ 3.0 ಸರ್ಕಾರದ ಮೊದಲ ಬಜೆಟ್‌ ಯಾವಾಗ? ಇಲ್ಲಿದೆ ಬಿಗ್‌ ಅಪ್‌ಡೇಟ್‌

AIDSO protest demanding investigation into corruption in NEET entrance exam
ರಾಯಚೂರು6 hours ago

Raichur News: ನೀಟ್ ಭ್ರಷ್ಟಾಚಾರದ ತನಿಖೆಗೆ ಆಗ್ರಹಿಸಿ ಮಾನ್ವಿಯಲ್ಲಿ ಎಐಡಿಎಸ್ಒ ಪ್ರತಿಭಟನೆ

Sharmitha Gowda in bikini
ಕಿರುತೆರೆ8 months ago

Geetha Serial Kannada: ನಿದ್ದೆ ಕದ್ದ ಚೋರಿ! ನಟಿ `ಭಾನುಮತಿ’ ಹಾಟ್‌ ಪೋಟೊಗಳಿಗೆ ಫ್ಯಾನ್ಸ್ ಫುಲ್ ಫಿದಾ

Kannada Serials
ಕಿರುತೆರೆ8 months ago

Kannada Serials TRP: 2ನೇ ಸ್ಥಾನದಲ್ಲಿ 2 ಧಾರಾವಾಹಿಗಳು; ಟಿಆರ್‌ಪಿ ರೇಸ್‌ನಲ್ಲಿಲ್ಲ ಭಾಗ್ಯಲಕ್ಷ್ಮೀ!

Bigg Boss- Saregamapa 20 average TRP
ಕಿರುತೆರೆ8 months ago

Kannada Serials TRP: ಏಳನೇ ಸ್ಥಾನಕ್ಕೆ ʻಅಮೃತಧಾರೆʼ ಕುಸಿತ; ಬಿಗ್‌ ಬಾಸ್‌-ಸರಿಗಮಪ ಟಿಆರ್‌ಪಿ ಎಷ್ಟು?

galipata neetu
ಕಿರುತೆರೆ7 months ago

Kanyadana Serial: ಕಿರುತೆರೆಗೆ ಮತ್ತೆ ಎಂಟ್ರಿ ಕೊಟ್ಟ ʻಗಾಳಿಪಟʼ ಖ್ಯಾತಿಯ ʻನೀತುʼ!

Kannada Serials
ಕಿರುತೆರೆ9 months ago

Kannada Serials TRP: ನಾಲ್ಕನೇ ಸ್ಥಾನಕ್ಕೆ ಕುಸಿತ ಕಂಡ ʻಸೀತಾ ರಾಮʼ; ಟಿಆರ್‌ಪಿ ರೇಸ್‌ಗೆ ʻಭಾಗ್ಯಲಕ್ಷ್ಮಿʼ ಬ್ಯಾಕ್‌!

Kannada Serials
ಕಿರುತೆರೆ8 months ago

Kannada Serials TRP: ಟಿಆರ್‌ಪಿಯಲ್ಲಿ ʻಭಾಗ್ಯಲಕ್ಷ್ಮೀʼ ಹವಾ; ʻಪುಟ್ಟಕ್ಕನ ಮಕ್ಕಳುʼ ಧಾರಾವಾಹಿಗೆ ಸಂಕಷ್ಟ!

Bigg Boss' dominates TRP; Sita Rama fell to the sixth position
ಕಿರುತೆರೆ8 months ago

Kannada Serials TRP: ಟಿಆರ್‌ಪಿಯಲ್ಲಿ ʻಬಿಗ್ ಬಾಸ್ʼದೇ ಮೇಲುಗೈ; 6ನೇ ಸ್ಥಾನಕ್ಕೆ ಕುಸಿದ ʻಸೀತಾ ರಾಮʼ

geetha serial Dhanush gowda engagement
ಕಿರುತೆರೆ6 months ago

Dhanush Gowda: ಗೀತಾ ಧಾರಾವಾಹಿ ನಟನ ನಿಶ್ಚಿತಾರ್ಥ; ಭವ್ಯಾಳ ಕಮೆಂಟ್‌ ಬಾಕ್ಸ್‌ ಆಫ್‌!

varun
ಕಿರುತೆರೆ7 months ago

Brindavana Serial: ʼಬೃಂದಾವನʼ ಧಾರಾವಾಹಿಯಲ್ಲಿ ದೊಡ್ಡ ಟ್ವಿಸ್ಟ್‌; ಪ್ರಮುಖ ಪಾತ್ರಧಾರಿಯೇ ಬದಲು

Kannada Serials
ಕಿರುತೆರೆ9 months ago

Kannada Serials TRP: ಟಿಆರ್‌ಪಿಯಲ್ಲಿ ಏರಿಕೆ ಕಂಡ ʻಅಮೃತಧಾರೆʼ; ʻಗಟ್ಟಿಮೇಳʼಕ್ಕೆ ನಾಲ್ಕನೇ ಸ್ಥಾನ!

karnataka weather Forecast
ಮಳೆ2 days ago

Karnataka Weather : ಭಾರಿ ಮಳೆಗೆ ಗುಡ್ಡದಿಂದ ಉರುಳಿ ಬಿದ್ದ ಬಂಡೆಗಲ್ಲು; ಬೆಂಗಳೂರಲ್ಲೂ ಸಂಜೆ ವರ್ಷಧಾರೆ

actor Darshan
ಚಿತ್ರದುರ್ಗ2 days ago

Actor Darshan: ರೇಣುಕಾ ಸ್ವಾಮಿ ಕೊಲೆ ಕೇಸ್‌ನಲ್ಲಿ ದರ್ಶನ್‌ ಅರೆಸ್ಟ್‌; ಪ್ರಕರಣವನ್ನು ಸಿಬಿಐಗೆ ವಹಿಸಲು ಒತ್ತಾಯ

Actor Darshan gets a series of questions from the police
ಸಿನಿಮಾ2 days ago

Actor Darshan : ಪವಿತ್ರಗೌಡ ಬಗ್ಗೆ ಪೋಸ್ಟ್‌ ಮಾಡಿದ್ರೆ ನಿಮಗ್ಯಾಕೆ ಕೋಪ? ದರ್ಶನ್‌ಗೆ ಪೊಲೀಸರ ಪ್ರಶ್ನೆಗಳ ಸುರಿಮಳೆ

Actor Darshan
ಸಿನಿಮಾ3 days ago

Actor Darshan : ದರ್ಶನ್‌ ಜೈಲಿಗೆ ಹೋಗುತ್ತಿರುವುದು ಇದೇ ಮೊದಲಲ್ಲ; ನಟನ ಮೇಲಿವೆ ಹತ್ತಾರು ಕೇಸ್‌ಗಳು!

Saptami Gowda
ಸಿನಿಮಾ3 days ago

Saptami Gowda : ಯುವ ಪತ್ನಿ ಶ್ರೀದೇವಿ ವಿರುದ್ಧ ಮಾನಹಾನಿ ಕೇಸ್; ಕಾನೂನು ಹೋರಾಟಕ್ಕೆ ಮುಂದಾದ ನಟಿ ಸಪ್ತಮಿ ಗೌಡ!

Karnataka weather Forecast
ಮಳೆ3 days ago

Karnataka Weather : ಭಾರಿ ಮಳೆಗೆ ಮನೆ ಗೋಡೆ ಕುಸಿದು ಎಮ್ಮೆಗಳು ಸಾವು; ಆಕಳಿನ ಜೀವ ತೆಗೆದ ವಿದ್ಯುತ್‌ ತಂತಿ

Karnataka weather Forecast
ಮಳೆ6 days ago

Karnataka weather : ಮಳೆಯಲ್ಲೆ ತಪಸ್ಸಿಗೆ ಕುಳಿತ ವೃದ್ಧ; ಇನ್ನೊಂದು ವಾರ ನಾನ್‌ ಸ್ಟಾಪ್‌ ವರುಣನ ಅಬ್ಬರ

Sigandur launch
ಶಿವಮೊಗ್ಗ6 days ago

Sigandur launch: ಸಿಗಂದೂರು ಲಾಂಚ್‌ನಲ್ಲಿ ಭಾರಿ ವಾಹನಗಳಿಗೆ ನಿರ್ಬಂಧ

Karnataka Rain
ಮಳೆ1 week ago

Karnataka Rain : ಭಾರಿ ಮಳೆಗೆ ಮರ ಬಿದ್ದು ಮೇಕೆಗಳು ಸಾವು; ಸಿಡಿಲಿಗೆ ಎಲೆಕ್ಟ್ರಿಕ್‌ ಅಂಗಡಿ ಸುಟ್ಟು ಭಸ್ಮ

Lok Sabha Election Result 2024 Live
ದೇಶ1 week ago

Lok Sabha Election Result 2024 Live: ಲೋಕಸಭೆ ಚುನಾವಣೆ ಫಲಿತಾಂಶದ ಲೈವ್‌ ಇಲ್ಲಿ ವೀಕ್ಷಿಸಿ

ಟ್ರೆಂಡಿಂಗ್‌