PM Narendra Modi: ಮೋದಿಗೆ ಟ್ವಿಟರ್‌ನಲ್ಲಿ 9 ಕೋಟಿ ಫಾಲೋವರ್ಸ್! ಟ್ರಂಪ್ ಹಿಂದಿಕ್ಕಿದ ಭಾರತದ ಪ್ರಧಾನಿ - Vistara News

ದೇಶ

PM Narendra Modi: ಮೋದಿಗೆ ಟ್ವಿಟರ್‌ನಲ್ಲಿ 9 ಕೋಟಿ ಫಾಲೋವರ್ಸ್! ಟ್ರಂಪ್ ಹಿಂದಿಕ್ಕಿದ ಭಾರತದ ಪ್ರಧಾನಿ

PM Narendra Modi: ಜಗತ್ತಿನ ಜನಪ್ರಿಯ ನಾಯಕರಲ್ಲೊಬ್ಬರಾಗಿರುವ ಪ್ರಧಾನಿ ನರೇಂದ್ರ ಮೋದಿ ಅವರು ಟ್ವಿಟರ್‌ನಲ್ಲಿ ಅತಿ ಹೆಚ್ಚು ಫಾಲೋವರ್ಸ್ ಹೊಂದಿರುವ ಟಾಪ್ ಟೆನ್ ಪಟ್ಟಿಯಲ್ಲಿ ಅಮೆರಿಕದ ಮಾಜಿ ಅಧ್ಯಕ್ಷ ಡೋನಾಲ್ಡ್ ಟ್ರಂಪ್ ಅವರನ್ನು ಹಿಂದಿಕ್ಕಿದ್ದಾರೆ.

VISTARANEWS.COM


on

Uttarkashi Tunnel rescue success makes us emotional says PM Narendra Modi
ಮಹತ್ವದ, ಕುತೂಹಲಕರ ಸುದ್ದಿಗಾಗಿ ಫಾಲೊ ಮಾಡಿ
Koo

ನವದೆಹಲಿ: ಜಗತ್ತಿನ ನಂಬರ್ 1 ಜನಪ್ರಿಯ ನಾಯಕರೆನಿಸಿಕೊಂಡಿರುವ ಪ್ರಧಾನಿ ನರೇಂದ್ರ ಮೋದಿ (PM Narendra Modi) ಅವರು ಟ್ವಿಟರ್‌ನಲ್ಲೂ (Twitter) ಅದ್ವಿತೀಯ ಸಾಧನೆ ಮಾಡಿದ್ದಾರೆ. ಜಾಗತಿಕವಾಗಿ ಸಕ್ರಿಯ ರಾಜಕಾರಣಿಗಳಲ್ಲೇ ಅತಿ ಹೆಚ್ಚು ಫಾಲೋವರ್ಸ್ ಹೊಂದಿದ್ದಾರೆ. ನರೇಂದ್ರ ಮೋದಿ ಅವರ ಟ್ವಿಟರ್ ಖಾತೆಯು ಈಗ 90 ಮಿಲಿಯನ್ ಅಂದರೆ, 9 ಕೋಟಿ ಫಾಲೋವರ್ಸ್ ಹೊಂದಿದೆ. ಅಮೆರಿಕ ಮಾಜಿ ಅಧ್ಯಕ್ಷ ಡೋನಾಲ್ಡ್ ಟ್ರಂಪ್ (US Former President Donald Trump) ಅವರನ್ನು ಹಿಂದಿಕ್ಕಿರುವ ಭಾರತದ ಪ್ರಧಾನಿ ಮೋದಿ ಅವರು ಟಾಪ್ 10 ಪಟ್ಟಿಯಲ್ಲಿ (Top 10 List) 8ನೇ ಸ್ಥಾನಕ್ಕೆ ಏರಿಕೆಯಾಗಿದ್ದಾರೆ.

90.2 ಮಿಲಿಯನ್ ಫಾಲೋವರ್ಸ್ ಹೊಂದಿರುವ ಪ್ರಧಾನಿ ಮೋದಿ ಟ್ವಿಟರ್‌ನಲ್ಲಿ ಅತಿ ಹೆಚ್ಚು ಅನುಸರಿಸುವ ಭಾರತೀಯರಾಗಿದ್ದಾರೆ. ಅವರ ಅನುಯಾಯಿಗಳ ಪಟ್ಟಿಯಲ್ಲಿ ಟ್ವಿಟರ್ ಬಾಸ್ ಎಲಾನ್ ಮಸ್ಕ್ ಸೇರಿದ್ದಾರೆ. ಅತಿ ಹೆಚ್ಚು ಫಾಲೋವರ್ಸ್ ಹೊಂದಿರುವ ಮೋದಿ ಅವರು ಸೋಷಿಯಲ್ ಮೀಡಿಯಾಗಳಲ್ಲಿ ಕೇವಲ 195 ವ್ಯಕ್ತಿಗಳನ್ನು ಫಾಲೋ ಮಾಡುತ್ತಾರೆ. ಪ್ರಧಾನಿ ಮೋದಿ ಟ್ವಿಟರ್‌ನಲ್ಲಿ 2,589 ಜನರನ್ನು ಅನುಸರಿಸುತ್ತಾರೆ.

ಗುಜರಾತ್ ಮುಖ್ಯಮಂತ್ರಿಯಾಗಿದ್ದಾಗ ಪ್ರಧಾನಿ ನರೇಂದ್ರ ಮೋದಿ ಅವರು 2009ರಲ್ಲಿ ಟ್ವಿಟರ್‌ಗೆ ಎಂಟ್ರಿ ಕೊಟ್ಟರು. ಒಂದೇ ವರ್ಷದಲ್ಲಿ ಅವರ ಫಾಲೋವರ್ಸ್ ಸಂಖ್ಯೆ ಒಂದು ಲಕ್ಷಕ್ಕೇರಿತ್ತು 2020 ಜುಲೈನಲ್ಲಿ ಪ್ರಧಾನಿ ಮೋದಿ ಅವರ ಟ್ವಿಟರ್ ಫಾಲೋವರ್ಸ್ ಸಂಖ್ಯೆ 6 ಕೋಟಿಗೆ ಏರಿಕೆಯಾಗಿತ್ತು.

ಜುಲೈ 9 ರಂದು ವರ್ಲ್ಡ್ ಆಫ್ ಸ್ಟ್ಯಾಟಿಸ್ಟಿಕ್ಸ್ ತನ್ನ ಅಧಿಕೃತ ಟ್ವಿಟರ್ ಹ್ಯಾಂಡಲ್‌ನಲ್ಲಿ ಬಿಡುಗಡೆ ಮಾಡಿದ ಪಟ್ಟಿಯ ಪ್ರಕಾರ, ವಿಶ್ವದಲ್ಲೇ ಟ್ವಿಟರ್‌ನಲ್ಲಿ ಹೆಚ್ಚು ಅನುಸರಿಸುತ್ತಿರುವ ಟಾಪ್ 10 ವ್ಯಕ್ತಿಗಳಲ್ಲಿ ಪಿಎಂ ಮೋದಿ ಏಕೈಕ ಭಾರತೀಯರಾಗಿದ್ದಾರೆ. ಈ ಟಾಪ್ 10 ಪಟ್ಟಿಯಲ್ಲಿ ಪ್ರಧಾನಿ ನರೇಂದ್ರ ಮೋದಿ ಅವರು ಅಮೆರಿಕದ ಮಾಜಿ ಅಧ್ಯಕ್ಷ ಡೋನಾಲ್ಡ್ ಟ್ರಂಪ್ ಅವರನ್ನು ಹಿಂದಿಕ್ಕಿ 8ನೇ ಸ್ಥಾನಕ್ಕೆ ಏರಿಕೆಯಾಗಿದ್ದಾರೆ. ಟ್ರಂಪ್ ಅವರು 8.6 ಕೋಟಿ ಫಾಲೋವರ್ಸ್ ಹೊಂದಿದ್ದಾರೆ. ಅಮೆರಿಕ ಸಿಂಗರ್ ಹಾಗೂ ನಟಿ ಲೇಡಿ ಗಾಗಾ ಅವರಿಗೆ ಟ್ವಿಟರ್‌ನಲ್ಲಿ 8.41 ಕೋಟಿ ಫಾಲೋವರ್ಸ್ ಇದ್ದಾರೆ.

ಈ ಸುದ್ದಿಯನ್ನೂ ಓದಿ: PM Narendra Modi Interview: ಜಾಗತಿಕ ನಾಯಕತ್ವ ವಹಿಸಲು ಭಾರತ ಸಿದ್ಧ: ಫ್ರಾನ್ಸ್‌ ಪತ್ರಿಕೆಗೆ ನರೇಂದ್ರ ಮೋದಿ ವಿಶೇಷ ಸಂದರ್ಶನ

ಈ ಟಾಪ್ 10 ಪಟ್ಟಿಯಲ್ಲಿ ಎಲಾನ್ ಮಸ್ಕ್ 14.7 ಕೋಟಿ ಫಾಲೋವರ್ಸ್‌ಗಳೊಂದಿಗೆ ಪ್ರಥಮ ಸ್ಥಾನದಲ್ಲಿದ್ದಾರೆ. ನಂತರದ ಸ್ಥಾನದಲ್ಲಿ ಅಮೆರಿಕದ ಮಾಜಿ ಅಧ್ಯಕ್ಷ ಬಾರಾಕ್ ಒಬಾಮ್ ಅವರಿದ್ದಾರೆ. ಅವರಿಗೆ 13.21 ಕೋಟಿ ಫಾಲೋವರ್ಸ್ ಇದ್ದಾರೆ. ನಂತರ ಸ್ಥಾನದಲ್ಲಿ ಸಿಂಗರ್ ಜಸ್ಟೀನ್ ಬೈಬೇರ್(1.1 ಕೋಟಿ), ದಂತಕತೆ ಫುಟ್ಬಾಲ್ ಆಟಗಾರ ಕ್ರಿಸ್ಟಿಯಾನೋ ರೋನಾಲ್ಡೋ (10.89 ಕೋಟಿ) ಇದ್ದಾರೆ.

ದೇಶದ ಇನ್ನಷ್ಟು ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ.

ಕ್ಷಣ ಕ್ಷಣದ ಮಾಹಿತಿಗಾಗಿ Vistara News FaceBook ಪೇಜ್ ಫಾಲೋ ಮಾಡಿ
ಮಹತ್ವದ ಮಾಹಿತಿಗಾಗಿ ವಿಸ್ತಾರ ನ್ಯೂಸ್ ಆ್ಯಪ್ ಉಚಿತವಾಗಿ ಡೌನ್ ಲೋಡ್ ಮಾಡಿಕೊಳ್ಳಿ: Andriod App | IOS App
Continue Reading
Click to comment

Leave a Reply

Your email address will not be published. Required fields are marked *

ಕರ್ನಾಟಕ

Prajwal Revanna Case: ಪ್ರಜ್ವಲ್‌ ರೇವಣ್ಣಗೆ ಕೇಂದ್ರ ಸರ್ಕಾರ ನೋಟಿಸ್;‌ ಶೀಘ್ರವೇ ಬಂಧನ?

Prajwal Revanna Case: ಪ್ರಜ್ವಲ್‌ ರೇವಣ್ಣ ಅವರ ಡಿಪ್ಲೊಮ್ಯಾಟಿಕ್ ಪಾಸ್‌ಪೋರ್ಟ್‌ ರದ್ದುಗೊಳಿಸಬೇಕು ಎಂದು ರಾಜ್ಯ ಸರ್ಕಾರವು ಕೇಂದ್ರ ಸರ್ಕಾರಕ್ಕೆ ಪತ್ರ ಬರೆದಿದೆ. ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಪತ್ರ ಬರೆದ ಬೆನ್ನಲ್ಲೇ ವಿದೇಶಾಂಗ ವ್ಯವಹಾರಗಳ ಸಚಿವಾಲಯವು ಪಾಸ್‌ಪೋರ್ಟ್‌ ರದ್ದತಿಯ ಪ್ರಕ್ರಿಯೆ ಆರಂಭಿಸಿದೆ. ಇದರ ಬೆನ್ನಲ್ಲೇ, ಕೇಂದ್ರ ಸರ್ಕಾರವು ಪ್ರಜ್ವಲ್‌ ರೇವಣ್ಣನಿಗೆ ಶೋಕಾಸ್‌ ನೋಟಿಸ್‌ ಜಾರಿಗೊಳಿಸಿದೆ.

VISTARANEWS.COM


on

Prajwal Revanna Case
Koo

ನವದೆಹಲಿ/ಬೆಂಗಳೂರು: ಮಹಿಳೆಯರ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ ಪ್ರಕರಣದಲ್ಲಿ ಸಿಲುಕಿ, ವಿದೇಶಕ್ಕೆ ಪರಾರಿಯಾಗಿರುವ ಹಾಸನ ಸಂಸದ ಪ್ರಜ್ವಲ್‌ ರೇವಣ್ಣನ (Prajwal Revanna Case) ಡಿಪ್ಲೊಮ್ಯಾಟಿಕ್ ಪಾಸ್‌ಪೋರ್ಟ್‌ (Diplomatic Passport) ರದ್ದುಗೊಳಿಸಬೇಕು ಎಂದು ರಾಜ್ಯ ಸರ್ಕಾರವು ಕೇಂದ್ರ ಸರ್ಕಾರಕ್ಕೆ ಪತ್ರ ಬರೆದಿದೆ. ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಪತ್ರ ಬರೆದ ಬೆನ್ನಲ್ಲೇ ವಿದೇಶಾಂಗ ವ್ಯವಹಾರಗಳ ಸಚಿವಾಲಯವು ಪಾಸ್‌ಪೋರ್ಟ್‌ ರದ್ದತಿಯ ಪ್ರಕ್ರಿಯೆ ಆರಂಭಿಸಿದೆ. ಇದರ ಬೆನ್ನಲ್ಲೇ, ಕೇಂದ್ರ ಸರ್ಕಾರವು (Central Government) ಪ್ರಜ್ವಲ್‌ ರೇವಣ್ಣನಿಗೆ ಶೋಕಾಸ್‌ ನೋಟಿಸ್‌ ಜಾರಿಗೊಳಿಸಿದೆ.

ಲೈಂಗಿಕ ದೌರ್ಜನ್ಯ ಕೇಸ್‌ನಲ್ಲಿ ಪ್ರಮುಖ ಆರೋಪಿಯಾಗಿರುವ ಪ್ರಜ್ವಲ್‌ ರೇವಣ್ಣ ಅವರ ಡಿಪ್ಲೊಮ್ಯಾಟಿಕ್ ಪಾಸ್‌ಪೋರ್ಟ್‌ಅನ್ನು ರದ್ದುಗೊಳಿಸಬೇಕು ಎಂದು ಸಿದ್ದರಾಮಯ್ಯ ಅವರು ಎರಡು ಬಾರಿ ಪತ್ರ ಬರೆದಿದ್ದಾರೆ. ಈ ಹಿನ್ನೆಲೆಯಲ್ಲಿ ಕೇಂದ್ರ ಸರ್ಕಾರವು ಡಿಪ್ಲೊಮ್ಯಾಟಿಕ್ ಪಾಸ್‌ಪೋರ್ಟ್‌ ರದ್ದುಗೊಳಿಸುವ ಪ್ರಕ್ರಿಯೆ ಆರಂಭಿಸಿದೆ. ಇನ್ನು, ಇದರ ಭಾಗವಾಗಿಯೇ ಕೇಂದ್ರ ಸರ್ಕಾರವು ಪ್ರತಿಕ್ರಿಯೆ ಕೋರಿ ಪ್ರಜ್ವಲ್‌ ರೇವಣ್ಣಗೆ ಶೋಕಾಸ್‌ ನೋಟಿಸ್‌ ಜಾರಿಗೊಳಿಸಿದೆ. ಶೋಕಾಸ್‌ ನೋಟಿಸ್‌ಗೂ ಉತ್ತರ ನೀಡದಿದ್ದರೆ, ಕೇಂದ್ರ ಸರ್ಕಾರವು ಪಾಸ್‌ಪೋರ್ಟ್‌ ರದ್ದುಗೊಳಿಸಲಿದೆ. ಪಾಸ್‌ಪೋರ್ಟ್‌ ರದ್ದಾದರೆ, ಜರ್ಮನಿಯಲ್ಲಿಯೇ (ಅಲ್ಲೇ ಇದ್ದಾರೆ ಎಂಬ ವರದಿ ಇದೆ) ಅವರನ್ನು ಬಂಧಿಸಿ, ಭಾರತಕ್ಕೆ ಹಸ್ತಾಂತರ ಮಾಡಲಾಗುತ್ತದೆ ಎಂದು ಹೇಳಲಾಗುತ್ತಿದೆ. ‌

ಹೇಗೆ ರದ್ದಾಗುತ್ತದೆ ಪ್ರಜ್ವಲ್ ಡಿಪ್ಲೊಮ್ಯಾಟಿಕ್‌ ಪಾಸ್‌ಪೋರ್ಟ್‌?

ಭಾರತೀಯ ವಿದೇಶಾಂಗ ಇಲಾಖೆಗೆ ಎಸ್‌ಐಟಿ ಅಧಿಕಾರಿಗಳು ರಾಜ್ಯ ಗೃಹ ಇಲಾಖೆ ಮುಖಾಂತರ ಪತ್ರ ರವಾನಿಸಿದ್ದಾರೆ. ಈ ಹಿಂದೆ ಸಿಎಂ ಪತ್ರ ಬರೆದಿದ್ದ ವೇಳೆ ನ್ಯಾಯಾಲಯದ ಆದೇಶ ಬೇಕು ಎಂದು ಕೇಂದ್ರ ಗೃಹ ಇಲಾಖೆ ಹೇಳಿತ್ತು. ಹಾಗಾಗಿ ನ್ಯಾಯಾಲಯದಿಂದ ಅರೆಸ್ಟ್ ವಾರಂಟ್ ಪಡೆದು ಎಸ್‌ಐಟಿಯವರು ಪುನಃ ಪತ್ರ ಬರೆದಿದ್ದಾರೆ. ಹೀಗಾಗಿ ಭಾರತೀಯ ವಿದೇಶಾಂಗ ಇಲಾಖೆಯು ಪಾಸ್‌ಪೋರ್ಟ್ ರದ್ದು ಪ್ರಕ್ರಿಯೆಯನ್ನು ಆರಂಭ ಮಾಡಿದೆ.

ಪಾಸ್‌ಪೋರ್ಟ್ ಅಥಾರಿಟಿ ಆಫ್ ಇಂಡಿಯಾ ಭಾರತೀಯ ವಿದೇಶಾಂಗ ಇಲಾಖೆ ಅಡಿಯಲ್ಲಿ ಬರುತ್ತದೆ. ಎಸ್‌ಐಟಿಯಿಂದ ಬಂದಿರುವ ಪತ್ರವನ್ನು ದೃಢೀಕರಣಕ್ಕಾಗಿ ಕೇಂದ್ರ ಗೃಹ ಇಲಾಖೆಗೆ ರವಾನೆ ಮಾಡುತ್ತದೆ. ಕೇಂದ್ರ ಗೃಹ ಇಲಾಖೆ ಪರಿಶೀಲನೆ ನಡೆಸಿ ಸಮ್ಮತಿ ಸೂಚಿಸಿದರೆ ಭಾರತೀಯ ವಿದೇಶಾಂಗ ಇಲಾಖೆಯು ಪಾಸ್‌ಪೋರ್ಟ್ ಅನ್ನು ರದ್ದು ಮಾಡುತ್ತದೆ.

ಪಾಸ್‌ಪೋರ್ಟ್‌ ರದ್ದಾದರೆ ಮುಂದೇನು?

ಒಮ್ಮೆ ಪಾಸ್‌ಪೋರ್ಟ್ ರದ್ದಾದರೆ ಈ ಬಗ್ಗೆ ಎಲ್ಲ ದೇಶಗಳ ಇಮಿಗ್ರೇಷನ್‌ಗೂ ಮಾಹಿತಿಯನ್ನು ರವಾನೆ ಮಾಡಲಾಗುತ್ತದೆ. ಹೀಗಾಗಿ ಪ್ರಜ್ವಲ್ ರೇವಣ್ಣ ಭಾರತಕ್ಕೆ ಬರಲೇಬೇಕಾದ ಅನಿವಾರ್ಯತೆ ಸೃಷ್ಟಿಯಾಗುತ್ತದೆ. ಇಲ್ಲವೇ ಐಡೆಂಟಿಟಿ ಬದಲಾಯಿಸಿ ತಲೆಮರೆಸಿಕೊಂಡು ಓಡಾಡಬೇಕು. ಹೀಗಾಗಿ ಪ್ರಜ್ವಲ್ ರೇವಣ್ಣ ಭಾರತಕ್ಕೆ ಶೀಘ್ರದಲ್ಲೇ ಬರುವ ಸಾಧ್ಯತೆ ಇದೆ.

ಇದನ್ನೂ ಓದಿ: Prajwal Revanna Case: ತಾಳ್ಮೆ ಪರೀಕ್ಷಿಸಬೇಡ, ಈಗಲೇ ಬಂದು ಶರಣಾಗು; ಪ್ರಜ್ವಲ್‌ಗೆ ದೇವೇಗೌಡರ ವಾರ್ನಿಂಗ್‌

Continue Reading

ಪ್ರಮುಖ ಸುದ್ದಿ

Rameshwaram Cafe: ನಮ್ಮ ರೆಸ್ಟೋರೆಂಟ್‌ನಲ್ಲಿ ಜಿರಳೆ ಇರಲಿಲ್ಲ, ಕಳಪೆ ಆಹಾರ ಬಳಸಿಲ್ಲ; ರಾಮೇಶ್ವರಂ ಕೆಫೆ ಸ್ಪಷ್ಟನೆ

Rameshwaram Cafe: ವಾಸ್ತವವಾಗಿ, ಜಿರಳೆಗಳು ರಾಮೇಶ್ವರಂ ಕೆಫೆಯಲ್ಲಿ ಅಲ್ಲ, ಬೇರೆ ರೆಸ್ಟೋರೆಂಟ್​ನಲ್ಲಿ ಕಂಡುಬಂದಿವೆ. ನಮ್ಮ ಕೆಫೆಯಲ್ಲಿ, ನಮ್ಮ ಮಾನದಂಡಗಳನ್ನು ಕಾಪಾಡಿಕೊಳ್ಳಲು ನಾವು ಪ್ರತಿದಿನ ಸ್ವಚ್ಛತೆ ಮಾಡುತ್ತೇವೆ. ಪ್ರತಿ ತಿಂಗಳು ಕೀಟ ನಿಯಂತ್ರಣ ಕಾರ್ಯ ನಡೆಸುತ್ತೇವೆ ಎಂದು ಹೇಳಿದರು.

VISTARANEWS.COM


on

Rameshwaram Cafe
Koo

ಬೆಂಗಳೂರು: ಹೈದರಾಬಾದ್​ನ ರಾಮೇಶ್ವರಂ ಕೆಫೆಯ (Rameshwaram Cafe) ಮೇಲೆ ತೆಲಂಗಾಣದ ಆಹಾರ ಸುರಕ್ಷತಾ ಅಧಿಕಾರಿಗಳು ದಾಳಿ ಮಾಡಿ ಅವಧಿ ಮೀರಿದ ವಸ್ತುಗಳು ಪತ್ತೆಯಾಗಿವೆ ಎಂದು ಹೇಳಿಕೆ ನೀಡಿರುವ ಹಿನ್ನೆಲೆಯಲ್ಲಿ ಹೋಟೆಲ್​ನ ಮಾಲೀಕರಾದ ದಿವ್ಯಾ ರಾಘವೇಂದ್ರ ರಾವ್ ಹಾಗೂ ರಾಘವೇಂದ್ರ ರಾವ್ ಸ್ಪಷ್ಟನೆ ನೀಡಿದ್ದಾರೆ. ನಮ್ಮ ಹೈದರಾಬಾದ್ ಮಳಿಗೆಗಾಗಿ ಅಧಿಕಾರಿಗಳು ಮಾಡಿದ ಪರಿಶೀಲನೆಯನ್ನು ನಾವು ಗಮನಿಸಿದ್ದೇವೆ. ಸೇವೆ ಮತ್ತು ನೈರ್ಮಲ್ಯದ ಅತ್ಯುನ್ನತ ಮಾನದಂಡಗಳನ್ನು ಕಾಪಾಡಿಕೊಳ್ಳಲು ನಾವು ಸಂಪೂರ್ಣವಾಗಿ ಬದ್ಧರಾಗಿದ್ದೇವೆ ಮತ್ತು ಗ್ರಾಹಕರ ಸುರಕ್ಷತೆ ಮತ್ತು ಕಲ್ಯಾಣವು ನಮ್ಮ ಉನ್ನತ ಆದ್ಯತೆಯಾಗಿದೆ ಎಂದು ನಾವು ಭರವಸೆ ನೀಡಲು ಬಯಸುತ್ತೇವೆ ಎಂದು ಅವರು ಹೇಳಿದ್ದಾರೆ.

ನಾವು ಈಗಾಗಲೇ ಈ ವಿಷಯವನ್ನು ಪರಿಶೀಲಿಸುತ್ತಿದ್ದೇವೆ ಮತ್ತು ಸತ್ಯಗಳನ್ನು ಪರಿಶೀಲಿಸಲು ಮತ್ತು ಪ್ರತಿ ಮಳಿಗೆಯ ಸ್ಟಾಕ್ ಕುರಿತು ಆಂತರಿಕ ತನಿಖೆಗೆ ಆದೇಶಿಸಿದ್ದೇವೆ. ವಿಷಯದ ಆಳಕ್ಕೆ ಹೋಗಲು ನಾವು ಅಧಿಕಾರಿಗಳಿಗೆ ಎಲ್ಲಾ ಸಹಕಾರವನ್ನು ನೀಡುವುದನ್ನು ಮುಂದುವರಿಸುತ್ತೇವೆ. ನಮ್ಮ ಹೈದರಾಬಾದ್ ಮಳಿಗೆಯಲ್ಲಿನ ಬಳಕೆಯ ಉದ್ದೇಶಕ್ಕೆ ನಮಗೆ ವಾರಕ್ಕೆ 500 ಕೆ.ಜಿ ಉದ್ದಿನ ಬೇಳೆ, ಪ್ರತಿದಿನ 300 ಲೀಟರ್ ಹಾಲು ಮತ್ತು ಪ್ರತಿದಿನ 80 ರಿಂದ 100 ಲೀಟರ್ ಮೊಸರು ಬೇಕಾಗುತ್ತದೆ. ಪತ್ತೆಯಾದ ದಾಸ್ತಾನುಗಳನ್ನು ಸೀಲ್ ಮಾಡಲಾಗಿತ್ತು. ಅದನ್ನು ಹೊರಗೆ ಕೊಂಡೊಯ್ಯವ ಉದ್ದೇಶವಿತ್ತು. ಅದು ಬಳಕೆಗಾಗಿ ಅಲ್ಲ. ಅತ್ಯುತ್ತಮ ಮಾರಾಟಗಾರರಿಂದ ಅತ್ಯುನ್ನತ ಗುಣಮಟ್ಟದ ಉತ್ಪನ್ನಗಳನ್ನು ನಾವು ಬಳಸುತ್ತೇವೆ ಎಂದು ಅವರು ಹೇಳಿದ್ದಾರೆ.

ಲೇಬಲ್ ಮಾಡದ ಉತ್ಪನ್ನಗಳ ಬಳಕೆಯನ್ನು ಕಾನೂನು ನಿಷೇಧಿಸುವುದಿಲ್ಲ. ನಾವು ಅತ್ಯುನ್ನತ ನೈರ್ಮಲ್ಯ ಮಾನದಂಡಗಳನ್ನು ಕಾಪಾಡುತ್ತೇವೆ. ಕೆಲವು ವರದಿಗಳು ನಮ್ಮ ಅಡುಗೆಮನೆಯಲ್ಲಿ ಜಿರಳೆಗಳು ಕಂಡುಬಂದಿವೆ ಎಂದು ಸುಳ್ಳು ಹೇಳಿಕೊಂಡಿವೆ. ಅಧಿಕೃತ ವರದಿಯಲ್ಲಿ ಇದನ್ನು ಉಲ್ಲೇಖಿಸಲಾಗಿಲ್ಲ; ವಾಸ್ತವವಾಗಿ, ಜಿರಳೆಗಳು ರಾಮೇಶ್ವರಂ ಕೆಫೆಯಲ್ಲಿ ಅಲ್ಲ, ಬೇರೆ ರೆಸ್ಟೋರೆಂಟ್​ನಲ್ಲಿ ಕಂಡುಬಂದಿವೆ. ನಮ್ಮ ಕೆಫೆಯಲ್ಲಿ, ನಮ್ಮ ಮಾನದಂಡಗಳನ್ನು ಕಾಪಾಡಿಕೊಳ್ಳಲು ನಾವು ಪ್ರತಿದಿನ ಸ್ವಚ್ಛತೆ ಮಾಡುತ್ತೇವೆ. ಪ್ರತಿ ತಿಂಗಳು ಕೀಟ ನಿಯಂತ್ರಣ ಕಾರ್ಯ ನಡೆಸುತ್ತೇವೆ ಎಂದು ಹೇಳಿದರು.

ಇದನ್ನೂ ಓದಿ: Rameshwaram Cafe : ಅವಧಿ ಮುಗಿದ ವಸ್ತುಗಳಲ್ಲಿ ತಿಂಡಿ ತಯಾರಿ, ರಾಮೇಶ್ವರಂ ಕೆಫೆ ಮೇಲೆ ಆಹಾರ ಸುರಕ್ಷತಾ ಅಧಿಕಾರಿಗಳ ದಾಳಿ

ಶೋಕಾಸ್ ನೋಟಿಸ್ ಪಡೆದಿಲ್ಲ

ನಾವು ಅಧಿಕಾರಿಗಳಿಂದ ಯಾವುದೇ ಶೋಕಾಸ್ ನೋಟಿಸ್ ಸ್ವೀಕರಿಸಿಲ್ಲ. ಅವರೊಂದಿಗೆ ಸಂಪೂರ್ಣವಾಗಿ ಸಹಕರಿಸುವುದನ್ನು ಮುಂದುವರಿಸುತ್ತೇವೆ ಎಂದು ನಾವು ಸ್ಪಷ್ಟಪಡಿಸಲು ಬಯಸುತ್ತೇವೆ. ನಾವು ರಾಜ್ಯಗಳಾದ್ಯಂತ ನಮ್ಮ ಎಲ್ಲಾ ಮಳಿಗೆಗಳಿಗೆ ನೈರ್ಮಲ್ಯ ಮತ್ತು ಪ್ರಮಾಣಿತ ತಪಾಸಣೆಗೆ ಆದೇಶಿಸಿದ್ದೇವೆ ಮತ್ತು ಗ್ರಾಹಕರಿಗೆ ವಿಭಾಗದಲ್ಲಿ ಅತ್ಯುತ್ತಮವಾದದನ್ನು ಒದಗಿಸುವ ನಮ್ಮ ಬಲವಾದ ಬದ್ಧತೆಯನ್ನು ತಿಳಿಸಲು ಬಯಸುತ್ತೇವೆ. ನಮ್ಮ ಗ್ರಾಹಕರ ಹೃದಯ ಮತ್ತು ಆತ್ಮಗಳನ್ನು ಗೆಲ್ಲಲು ಕೆಲವು ಗುಣಮಟ್ಟದ ಆಹಾರ ಮತ್ತು ಸೇವೆಗಳನ್ನು ಕಾಪಾಡಿಕೊಳ್ಳುವುದು ಮುಖ್ಯ ಎಂದು ನಾವು ಯಾವಾಗಲೂ ನಂಬಿದ್ದೇವೆ ಎಂದು ಹೇಳಿದ್ದಾರೆ.

Continue Reading

ದೇಶ

RBI Dividend: ಆರ್‌ಬಿಐನಿಂದ ಕೇಂದ್ರಕ್ಕೆ 2.11 ಲಕ್ಷ ಕೋಟಿ ರೂ.‌ ಡಿವಿಡೆಂಡ್! ಮುಂದಿನ ಸರ್ಕಾರಕ್ಕೆ ವರ!

RBI Dividend: ಕೇಂದ್ರ ಸರ್ಕಾರಕ್ಕೆ 2023-24ನೇ ಸಾಲಿನಲ್ಲಿ ಭಾರತೀಯ ರಿಸರ್ವ್‌ ಬ್ಯಾಂಕ್ ದಾಖಲೆಯ 2.11 ಲಕ್ಷ ಕೋಟಿ ರೂ. ಡೆವಿಡೆಂಡ್‌ (ಲಾಭಾಂಶ) ನೀಡಲು ಒಪ್ಪಿಗೆ ನೀಡಿರುವುದು ಕೂಡ ಷೇರು ಮಾರುಕಟ್ಟೆಯ ಏರಿಕೆಗೆ ಕಾರಣ ಎನ್ನಲಾಗುತ್ತಿದೆ. 2022-23ರಲ್ಲಿ ಕೇಂದ್ರ ಸರ್ಕಾರಕ್ಕೆ ಆರ್‌ಬಿಐ 87 ಸಾವಿರ ಕೋಟಿ ರೂ. ನೀಡಿತ್ತು. ಆದರೆ, ಅದು ಎರಡು ಪಟ್ಟು ಜಾಸ್ತಿಯಾಗಿರುವುದರಿಂದ ಹೊಸ ಸರ್ಕಾರಕ್ಕೆ ಭಾರಿ ಅನುಕೂಲವಾಗಲಿದೆ ಎಂದು ಹೇಳಲಾಗುತ್ತಿದೆ.

VISTARANEWS.COM


on

RBI Dividend
Koo

ಮುಂಬೈ: ಲೋಕಸಭೆ ಚುನಾವಣೆ (Lok Sabha Election 2024) ಕೊನೆಯ ಹಂತಕ್ಕೆ ಬಂದಿದ್ದು, ಇನ್ನೆರಡು ತಿಂಗಳು ಬಾಕಿ ಇವೆ. ಸೋಲು ಗೆಲುವಿನ ಲೆಕ್ಕಾಚಾರ ನಡೆಯುತ್ತಿದೆ. ಇನ್ನೆರಡು ಹಂತದ ಮತದಾನಕ್ಕೆ ಅಬ್ಬರದ ಪ್ರಚಾರ ನಡೆಯುತ್ತಿದೆ. ಇದರ ಬೆನ್ನಲ್ಲೇ, ಭಾರತೀಯ ರಿಸರ್ವ್‌ ಬ್ಯಾಂಕ್‌ನಿಂದ (Reserve Bank Of India) ಮಹತ್ವದ ಪ್ರಕಟಣೆ ಹೊರಬಿದ್ದಿದೆ. ಕೇಂದ್ರ ಸರ್ಕಾರಕ್ಕೆ ಆರ್‌ಬಿಐ 2023-24ನೇ ಸಾಲಿನಲ್ಲಿ 2.11 ಲಕ್ಷ ಕೋಟಿ ರೂ. ಡಿವಿಡೆಂಡ್‌ (Dividend) (ಲಾಭಾಂಶ) ನೀಡುವುದಾಗಿ ಘೋಷಣೆ ಮಾಡಿದೆ.

ಜೂನ್‌ 4ರಂದು ನೂತನ ಸರ್ಕಾರ ರಚನೆಯಾಗಲಿದೆ. ವಿತ್ತೀಯ ಕೊರತೆ ನೀಗಿಸುವ ದಿಸೆಯಲ್ಲಿ ಆರ್‌ಬಿಐನ 2.11 ಲಕ್ಷ ಕೋಟಿ ರೂ. ಹೊಸ ಸರ್ಕಾರಕ್ಕೆ ವರದಾನವಾಗಲಿದೆ. ಅದರಲ್ಲೂ, ಆರ್‌ಬಿಐ ಇತಿಹಾಸದಲ್ಲಿಯೇ ದಾಖಲೆ ಮೊತ್ತದ ಡಿವಿಡೆಂಡ್‌ಅನ್ನು ಕೇಂದ್ರ ಸರ್ಕಾರಕ್ಕೆ ನೀಡುವುದಾಗಿ ಘೋಷಿಸಿರುವುದು ಹೊಸ ಸರ್ಕಾರಕ್ಕೆ ಭಾರಿ ಅನುಕೂಲವಾಗಲಿವೆ. ಇದು ದೇಶದ ಒಟ್ಟು ಜಿಡಿಪಿಯ ಶೇ.4ರಷ್ಟು ಮೊತ್ತವಾಗಿದೆ ಎಂದು ತಿಳಿದುಬಂದಿದೆ.

ಷೇರು ಪೇಟೆ ಲಯಕ್ಕೂ ಇದೇ ಕಾರಣ

ಕೇಂದ್ರ ಸರ್ಕಾರಕ್ಕೆ 2023-24ನೇ ಸಾಲಿನಲ್ಲಿ ಭಾರತೀಯ ರಿಸರ್ವ್‌ ಬ್ಯಾಂಕ್ ದಾಖಲೆಯ 2.11 ಲಕ್ಷ ಕೋಟಿ ರೂ. ಡೆವಿಡೆಂಡ್‌ (ಲಾಭಾಂಶ) ನೀಡಲು ಒಪ್ಪಿಗೆ ನೀಡಿರುವುದು ಕೂಡ ಷೇರು ಮಾರುಕಟ್ಟೆಯ ಏರಿಕೆಗೆ ಕಾರಣ ಎನ್ನಲಾಗುತ್ತಿದೆ. 2022-23ರಲ್ಲಿ ಕೇಂದ್ರ ಸರ್ಕಾರಕ್ಕೆ ಆರ್‌ಬಿಐ 87 ಸಾವಿರ ಕೋಟಿ ರೂ. ನೀಡಿತ್ತು. ಆದರೆ, ಅದು ಎರಡು ಪಟ್ಟು ಜಾಸ್ತಿಯಾಗಿರುವುದರಿಂದ ಕೇಂದ್ರ ಸರ್ಕಾರಕ್ಕೆ ಹೆಚ್ಚಿನ ಹಣ ಸಿಗುತ್ತದೆ. ಆ ಹಣವು ಸಾರ್ವಜನಿಕ ವಲಯದ ಸಂಸ್ಥೆಗಳಿಗೆ ವಿನಿಯೋಗವಾಗುತ್ತದೆ. ಇದರಿಂದ ಷೇರು ಪೇಟೆಯಲ್ಲಿ ಲಾಭ ಗಳಿಸಬಹುದು ಎಂಬ ಕಾರಣದಿಂದ ಹೂಡಿಕೆ ಜಾಸ್ತಿಯಾಗಿದೆ. ಗುರುವಾರವೂ ಸಾರ್ವಜನಿಕ ವಲಯದ ಸಂಸ್ಥೆಗಳು ಲಾಭ ಗಳಿಸಿರುವುದು ಈ ಮಾತಿಗೆ ಪುಷ್ಟಿ ನೀಡುವಂತಿದೆ.

“ಕೇಂದ್ರ ಸರ್ಕಾರವು ಕಳೆದ 10 ವರ್ಷಗಳಲ್ಲಿ ಮಹತ್ವದ ಸುಧಾರಣೆ ತಂದಿದೆ. ಆರ್ಥಿಕ ಶಿಸ್ತು, ವಿತ್ತೀಯ ಪ್ರಕ್ರಿಯೆಗಳಲ್ಲಿ ಸುಧಾರಣಾ ಕ್ರಮಗಳನ್ನು ಅನುಸರಿಸಿಕೊಂಡಿದೆ. ಇದರಿಂದಾಗಿ ಭಾರತದ ಷೇರು ಮಾರುಕಟ್ಟೆಯು ಕಳೆದ ಒಂದು ದಶಕದಲ್ಲಿ ಗಣನೀಯ ಏಳಿಗೆ ಕಂಡಿದೆ. 10 ವರ್ಷಗಳ ಹಿಂದೆ ಸೆನ್ಸೆಕ್ಸ್‌ 25 ಸಾವಿರ ಪಾಯಿಂಟ್ಸ್‌ ಹೊಂದಿತ್ತು. ಆದರೀಗ, ಸೆನ್ಸೆಕ್ಸ್‌ 75 ಸಾವಿರ ಪಾಯಿಂಟ್ಸ್‌ಗೆ ಏರಿಕೆಯಾಗಿದೆ. ಈಕ್ವಿಟಿ ಮಾರುಕಟ್ಟೆಯ ಮೌಲ್ಯವು ಕೆಲ ದಿನಗಳ ಹಿಂಷ್ಟೇ 5 ಲಕ್ಷ ಕೋಟಿ ಡಾಲರ್‌ ಆಗಿದೆ. ಹಾಗಾಗಿ, ಜೂನ್‌ 4ರಂದು ಷೇರು ಮಾರುಕಟ್ಟೆಯು ದಾಖಲೆ ಬರೆಯಲಿದೆ” ಎಂಬುದಾಗಿ ಪ್ರಧಾನಿ ನರೇಂದ್ರ ಮೋದಿ ಹೇಳಿದ್ದಾರೆ.

ಇದನ್ನೂ ಓದಿ: Equity Market: ದೇಶದ ಷೇರುಪೇಟೆಯಲ್ಲಿ ಗೂಳಿ ನೆಗೆತ; 6 ತಿಂಗಳಲ್ಲಿ 1 ಲಕ್ಷ ಕೋಟಿ ಡಾಲರ್‌ ಗಳಿಕೆ!

Continue Reading

ಪ್ರಮುಖ ಸುದ್ದಿ

Lok Sabha Election 2024: ಬೂತ್‌ವಾರು ಮತದಾನ ವಿವರ ನೀಡಬೇಕಿಲ್ಲ: ಸುಪ್ರೀಂ ಕೋರ್ಟ್‌

Lok Sabha Election 2024: ಚುನಾವಣಾ ಆಯೋಗದ ವೆಬ್‌ಸೈಟ್‌ನಲ್ಲಿ ಬೂತ್‌ವಾರು ಮತದಾನಗೊಂಡ ಸಂಪೂರ್ಣ ಮತದಾರರ ಸಂಖ್ಯೆಯನ್ನು ತಕ್ಷಣ ಪ್ರಕಟಿಸುವಂತೆ ಲಾಭರಹಿತ ಸಂಸ್ಥೆ ಅಸೋಸಿಯೇಷನ್ ​​ಫಾರ್ ಡೆಮಾಕ್ರಟಿಕ್ ರಿಫಾರ್ಮ್ಸ್ (ಎಡಿಆರ್) ಮನವಿ ಮಾಡಿತ್ತು. ಇದನ್ನು ಪೀಠ ಮುಂದೂಡಿದೆ.

VISTARANEWS.COM


on

lok sabha election 2024 supreme court
Koo

ಬೆಂಗಳೂರು: ಈ ಲೋಕಸಭೆ ಚುನಾವಣೆ (Lok Sabha Election 2024) ವೇಳೆಯೇ ಮತದಾನ ಮುಗಿದ ತಕ್ಷಣವೇ ಬೂತ್‌ವಾರು ಮತದಾನ (Boothwise voting) ಪ್ರಮಾಣದ ಅಂಕಿ ಅಂಶಗಳನ್ನು ಬಹಿರಂಗಪಡಿಸುವಂತೆ ಭಾರತೀಯ ಚುನಾವಣಾ ಆಯೋಗಕ್ಕೆ (ECI) ಯಾವುದೇ ನಿರ್ದೇಶನಗಳನ್ನು ನೀಡಲು ಸುಪ್ರೀಂ ಕೋರ್ಟ್ (Supreme court) ನಿರಾಕರಿಸಿದೆ.

ಚುನಾವಣಾ ಆಯೋಗದ ವೆಬ್‌ಸೈಟ್‌ನಲ್ಲಿ ಬೂತ್‌ವಾರು ಮತದಾನಗೊಂಡ ಸಂಪೂರ್ಣ ಮತದಾರರ ಸಂಖ್ಯೆಯನ್ನು ತಕ್ಷಣ ಪ್ರಕಟಿಸುವಂತೆ ಲಾಭರಹಿತ ಸಂಸ್ಥೆ ಅಸೋಸಿಯೇಷನ್ ​​ಫಾರ್ ಡೆಮಾಕ್ರಟಿಕ್ ರಿಫಾರ್ಮ್ಸ್ (ಎಡಿಆರ್) ಮನವಿ ಮಾಡಿತ್ತು. ಇದನ್ನು ಪೀಠ ಮುಂದೂಡಿದೆ. ಪಶ್ಚಿಮ ಬಂಗಾಳದ ಕೃಷ್ಣನಗರ ಕ್ಷೇತ್ರದ ಅಭ್ಯರ್ಥಿಯಾಗಿರುವ ತೃಣಮೂಲ ಕಾಂಗ್ರೆಸ್‌ನ ಮಾಜಿ ಸಂಸದೆ ಮಹುವಾ ಮೊಯಿತ್ರಾ ಅವರ ಇದೇ ರೀತಿಯ ಅರ್ಜಿಯನ್ನು ಎಡಿಆರ್‌ನ ಮನವಿಯೊಂದಿಗೆ ಪಟ್ಟಿ ಮಾಡಲಾಗಿದೆ.

ಲೋಕಸಭೆ ಚುನಾವಣೆ ಸಂದರ್ಭದಲ್ಲಿ ಚುನಾವಣಾ ಆಯೋಗವನ್ನು ಹೆಚ್ಚು ಒತ್ತಡಕ್ಕೊಳಪಡಿಸಬೇಕಿಲ್ಲ ಎಂದು ಕೋರ್ಟ್‌ ಅಭಿಪ್ರಾಯಪಟ್ಟಿದೆ. ನ್ಯಾಯಮೂರ್ತಿಗಳಾದ ದೀಪಂಕರ್ ದತ್ತಾ ಮತ್ತು ಸತೀಶ್ ಚಂದ್ರ ಶರ್ಮಾ ಅವರ ರಜಾಕಾಲದ ಪೀಠವು, ಸಕ್ರಿಯ ಚುನಾವಣಾ ಅವಧಿಯಲ್ಲಿ ಚುನಾವಣಾ ಪ್ರಕ್ರಿಯೆಯಲ್ಲಿ ನ್ಯಾಯಾಂಗ ಹಸ್ತಕ್ಷೇಪದ ಸಂಭಾವ್ಯ ದುಷ್ಪರಿಣಾಮಗಳನ್ನು ಎತ್ತಿ ತೋರಿಸಿದೆ. ಅಂತಹ ಕ್ರಮಗಳು ನಡೆಯುತ್ತಿರುವ ಈಗ ನಡೆಯುತ್ತಿರುವ ಮತದಾನದ ಕಾರ್ಯವಿಧಾನಗಳನ್ನು ಅಡ್ಡಿಪಡಿಸಬಹುದು ಎಂದು ಪೀಠ ಒತ್ತಿ ಹೇಳಿದೆ.

“ಈಗಾಗಲೇ ನಡೆಯುತ್ತಿರುವ ಮತದಾನವನ್ನು ನಾವು ಅಡ್ಡಿಪಡಿಸಲು ಸಾಧ್ಯವಿಲ್ಲ. ಚುನಾವಣೆಗಳ ನಡುವೆ ನಾವು ಆಯೋಗದ ಬಗ್ಗೆ ಸ್ವಲ್ಪ ಹಗುರವಾಗಿರಬೇಕು. ನಾವು ಪ್ರಕ್ರಿಯೆಯನ್ನು ಅಡ್ಡಿಪಡಿಸಲು ಸಾಧ್ಯವಿಲ್ಲ. ನಮಗೆ ಅಧಿಕಾರದಲ್ಲಿ ಸ್ವಲ್ಪ ವಿಶ್ವಾಸವಿರಲಿ” ಎಂದು ಪೀಠವು ಹೇಳಿದೆ.

ಇಸಿಐ ಪರ ಹಾಜರಿದ್ದ ಹಿರಿಯ ವಕೀಲ ಮಣಿಂದರ್ ಸಿಂಗ್ ಅವರ ಮಂಡನೆ ಗಮನಿಸಿದ ಪೀಠವು, ಚುನಾವಣಾ ಪ್ರಕ್ರಿಯೆಯು ಈಗಾಗಲೇ ಪ್ರಾರಂಭವಾದ ನಂತರ ಮನವಿಯನ್ನು ಸಲ್ಲಿಸಲಾಗಿದ್ದು, ಇದು ವಿವೇಕಯುತವಲ್ಲ ಎಂದು ಹೇಳಿದೆ. “ಇದು ಏಳು ಹಂತಗಳಲ್ಲಿ ನಡೆಯುವ ಚುನಾವಣೆ. ನಾಳೆ ಆರನೇ ಹಂತ. ನೀವು ಕೇಳುತ್ತಿರುವ ಈ ನಿರ್ದಿಷ್ಟ ಪ್ರಕ್ರಿಯೆಗೆ ಮಾನವಶಕ್ತಿ ಮತ್ತು ಹೆಚ್ಚಿನ ಅನುಸರಣೆಯ ಅಗತ್ಯವಿರುತ್ತದೆ” ಎಂದು ಪೀಠವು ಎಡಿಆರ್ ಪರವಾಗಿ ಹಾಜರಾದ ಹಿರಿಯ ವಕೀಲ ದುಶ್ಯಂತ್ ದವೆ ಮತ್ತು ಮೊಯಿತ್ರಾವನ್ನು ಪ್ರತಿನಿಧಿಸಿದ್ದ ಹಿರಿಯ ವಕೀಲ ಅಭಿಷೇಕ್ ಮನು ಸಿಂಘ್ವಿ ಅವರಿಗೆ ತಿಳಿಸಿದೆ.

ತನ್ನ ಆದೇಶದಲ್ಲಿ, ಎಡಿಆರ್‌ನ 2019ರ ಅರ್ಜಿಯು ಪ್ರಸ್ತುತ ಪರಿಗಣನೆಯಲ್ಲಿರುವ ಮಧ್ಯಂತರ ಅರ್ಜಿಯಂತೆಯೇ ಅಂತಿಮ ಪರಿಹಾರವನ್ನು ಕೇಳಿದೆ ಎಂದು ಸುಪ್ರೀಂ ಕೋರ್ಟ್ ಗಮನಿಸಿದೆ. “ಅರ್ಜಿಯಲ್ಲಿ ಅಂತಿಮ ಪರಿಹಾರವಾಗಿ ನೀವು ಪ್ರಾರ್ಥಿಸಿದ ಮಧ್ಯಂತರ ಪರಿಹಾರವನ್ನು ಕೇಳಲು ಹೇಗೆ ಸಾಧ್ಯ? ನೀವು 2019ರಲ್ಲಿ ಈ ಅರ್ಜಿಯನ್ನು ಸಲ್ಲಿಸಿದ್ದೀರಿ. ಇದನ್ನು ಮೊದಲೇ ಪಟ್ಟಿ ಮಾಡಲು ನೀವು ಯಾವ ಕ್ರಮಗಳನ್ನು ತೆಗೆದುಕೊಂಡಿದ್ದೀರಿ? ಚುನಾವಣೆ ಪ್ರಕ್ರಿಯೆ ಆರಂಭವಾದ ನಂತರವೇ ನೀವು ಅದನ್ನು ಏಕೆ ಸಲ್ಲಿಸಿದ್ದೀರಿ?” ಎಂದು ಪೀಠವು ಪ್ರಶ್ನಿಸಿತು.

ಎಡಿಆರ್‌ನ ಮನವಿಗೆ ಪ್ರತಿಕ್ರಿಯೆಯಾಗಿ ಆಯೋಗ ಅಫಿಡವಿಟ್‌ ಸಲ್ಲಿಸಿತ್ತು. ಚುನಾವಣಾ ಪ್ರಕ್ರಿಯೆಯ ಈ ಹಂತದಲ್ಲಿ ಇಂತಹ ವಿನಂತಿಯನ್ನು ನಿರ್ವಹಿಸಲು ಅಸಾಧ್ಯ. ಇದು ಚುನಾವಣೆಯ ಕ್ರಮಬದ್ಧ ನಡಾವಳಿಗೆ ಅಡ್ಡಿಪಡಿಸುತ್ತದೆ ಎಂದು ಇಸಿಐ ಹೇಳಿದೆ.

ಇದನ್ನೂ ಓದಿ: Lok Sabha Election 2024: ವಿವಿಪ್ಯಾಟ್‌ ಯಂತ್ರವನ್ನೇ ನೆಲಕ್ಕೆಸೆದು ಪುಡಿ ಪುಡಿ ಮಾಡಿದ ಶಾಸಕ; ವಿಡಿಯೋ ವೈರಲ್‌

Continue Reading
Advertisement
Prajwal Revanna Case
ಕರ್ನಾಟಕ48 seconds ago

Prajwal Revanna Case: ಪ್ರಜ್ವಲ್‌ ರೇವಣ್ಣಗೆ ಕೇಂದ್ರ ಸರ್ಕಾರ ನೋಟಿಸ್;‌ ಶೀಘ್ರವೇ ಬಂಧನ?

Crew on OTT
ಸಿನಿಮಾ5 mins ago

Crew on OTT: ಈ 5 ಕಾರಣಕ್ಕಾಗಿ ಟಬು, ಕರೀನಾ ನಟಿಸಿರುವ ʼಕ್ರ್ಯೂʼ ಸಿನಿಮಾ ನೋಡಬಹುದು

Soundarya Jagadish Cheating by soundarya Constructions Business Partners
ಬೆಂಗಳೂರು5 mins ago

Soundarya Jagadish : ಪಾರ್ಟ್ನರ್ಸ್ ದೋಖಾಕ್ಕೆ 60 ಕೋಟಿ ರೂ. ನಷ್ಟ ; ಸೌಂದರ್ಯ ಜಗದೀಶ್‌ ಡೆತ್‌ನೋಟ್‌ನಲ್ಲಿ ಬಯಲಾಯ್ತು ಸತ್ಯ

Fashion Show news
ಫ್ಯಾಷನ್5 mins ago

Fashion Show News: ಬಿಎಂಎಸ್‌ ಕಾಲೇಜಿನಲ್ಲಿ ನೋಡುಗರನ್ನು ಸೆಳೆದ ವಿದ್ಯಾರ್ಥಿಗಳ ಫ್ಯಾಷನ್‌ ಶೋ

Teacher
ವಿದೇಶ25 mins ago

17 ವರ್ಷದ ವಿದ್ಯಾರ್ಥಿಯ ಜತೆ 30 ಸಲ ಸೆಕ್ಸ್‌ ಮಾಡಿದ ಶಿಕ್ಷಕಿ; ಮುಂದೇನಾಯ್ತು ಅನ್ನೋದೇ ರೋಚಕ!

Travel Tips
ಪ್ರವಾಸ35 mins ago

Travel Tips: ಪ್ರವಾಸಪ್ರಿಯರೇ, ನಿಮ್ಮ ವಿಮಾನ ಪ್ರಯಾಣ ಆರಾಮದಾಯಕವಾಗಬೇಕಿದ್ದರೆ ಈ ಟಿಪ್ಸ್‌‌ ಪಾಲಿಸಿ!

SRH vs RR Qualifier 2
ಕ್ರೀಡೆ41 mins ago

SRH vs RR Qualifier 2: ಕ್ವಾಲಿಫೈಯರ್​ ಪಂದ್ಯಕ್ಕೆ ಕ್ಷಣಗಣನೆ; ಇತ್ತಂಡಗಳ ಬಲಾಬಲ ಹೇಗಿದೆ?

Road Accident
ಕರ್ನಾಟಕ50 mins ago

Road Accident: ಮೂಡಿಗೆರೆಯಲ್ಲಿ ಮೆಸ್ಕಾಂ ಲಾರಿ-ಓಮ್ನಿ ನಡುವೆ ಭೀಕರ ಅಪಘಾತ; ಸ್ಥಳದಲ್ಲೇ ನಾಲ್ವರ ದುರ್ಮರಣ

ಕ್ರೈಂ51 mins ago

Rave party: ಆಶಿ ರಾಯ್ ಡ್ರಗ್ಸ್‌ ಸೇವಿಸಿಲ್ಲ; ನಟಿ ಹೇಮಾ ಸೇವಿಸಿದ್ದು ಯಾವ ಮಾತ್ರೆ? ರಿಪೋರ್ಟ್‌ ರಿವೀಲ್!

Rameshwaram Cafe
ಪ್ರಮುಖ ಸುದ್ದಿ52 mins ago

Rameshwaram Cafe: ನಮ್ಮ ರೆಸ್ಟೋರೆಂಟ್‌ನಲ್ಲಿ ಜಿರಳೆ ಇರಲಿಲ್ಲ, ಕಳಪೆ ಆಹಾರ ಬಳಸಿಲ್ಲ; ರಾಮೇಶ್ವರಂ ಕೆಫೆ ಸ್ಪಷ್ಟನೆ

Sharmitha Gowda in bikini
ಕಿರುತೆರೆ8 months ago

Geetha Serial Kannada: ನಿದ್ದೆ ಕದ್ದ ಚೋರಿ! ನಟಿ `ಭಾನುಮತಿ’ ಹಾಟ್‌ ಪೋಟೊಗಳಿಗೆ ಫ್ಯಾನ್ಸ್ ಫುಲ್ ಫಿದಾ

Kannada Serials
ಕಿರುತೆರೆ7 months ago

Kannada Serials TRP: 2ನೇ ಸ್ಥಾನದಲ್ಲಿ 2 ಧಾರಾವಾಹಿಗಳು; ಟಿಆರ್‌ಪಿ ರೇಸ್‌ನಲ್ಲಿಲ್ಲ ಭಾಗ್ಯಲಕ್ಷ್ಮೀ!

Bigg Boss- Saregamapa 20 average TRP
ಕಿರುತೆರೆ7 months ago

Kannada Serials TRP: ಏಳನೇ ಸ್ಥಾನಕ್ಕೆ ʻಅಮೃತಧಾರೆʼ ಕುಸಿತ; ಬಿಗ್‌ ಬಾಸ್‌-ಸರಿಗಮಪ ಟಿಆರ್‌ಪಿ ಎಷ್ಟು?

galipata neetu
ಕಿರುತೆರೆ6 months ago

Kanyadana Serial: ಕಿರುತೆರೆಗೆ ಮತ್ತೆ ಎಂಟ್ರಿ ಕೊಟ್ಟ ʻಗಾಳಿಪಟʼ ಖ್ಯಾತಿಯ ʻನೀತುʼ!

Kannada Serials
ಕಿರುತೆರೆ8 months ago

Kannada Serials TRP: ನಾಲ್ಕನೇ ಸ್ಥಾನಕ್ಕೆ ಕುಸಿತ ಕಂಡ ʻಸೀತಾ ರಾಮʼ; ಟಿಆರ್‌ಪಿ ರೇಸ್‌ಗೆ ʻಭಾಗ್ಯಲಕ್ಷ್ಮಿʼ ಬ್ಯಾಕ್‌!

Kannada Serials
ಕಿರುತೆರೆ8 months ago

Kannada Serials TRP: ಟಿಆರ್‌ಪಿಯಲ್ಲಿ ʻಭಾಗ್ಯಲಕ್ಷ್ಮೀʼ ಹವಾ; ʻಪುಟ್ಟಕ್ಕನ ಮಕ್ಕಳುʼ ಧಾರಾವಾಹಿಗೆ ಸಂಕಷ್ಟ!

Bigg Boss' dominates TRP; Sita Rama fell to the sixth position
ಕಿರುತೆರೆ7 months ago

Kannada Serials TRP: ಟಿಆರ್‌ಪಿಯಲ್ಲಿ ʻಬಿಗ್ ಬಾಸ್ʼದೇ ಮೇಲುಗೈ; 6ನೇ ಸ್ಥಾನಕ್ಕೆ ಕುಸಿದ ʻಸೀತಾ ರಾಮʼ

geetha serial Dhanush gowda engagement
ಕಿರುತೆರೆ5 months ago

Dhanush Gowda: ಗೀತಾ ಧಾರಾವಾಹಿ ನಟನ ನಿಶ್ಚಿತಾರ್ಥ; ಭವ್ಯಾಳ ಕಮೆಂಟ್‌ ಬಾಕ್ಸ್‌ ಆಫ್‌!

varun
ಕಿರುತೆರೆ6 months ago

Brindavana Serial: ʼಬೃಂದಾವನʼ ಧಾರಾವಾಹಿಯಲ್ಲಿ ದೊಡ್ಡ ಟ್ವಿಸ್ಟ್‌; ಪ್ರಮುಖ ಪಾತ್ರಧಾರಿಯೇ ಬದಲು

Kannada Serials
ಕಿರುತೆರೆ8 months ago

Kannada Serials TRP: ಟಿಆರ್‌ಪಿಯಲ್ಲಿ ಏರಿಕೆ ಕಂಡ ʻಅಮೃತಧಾರೆʼ; ʻಗಟ್ಟಿಮೇಳʼಕ್ಕೆ ನಾಲ್ಕನೇ ಸ್ಥಾನ!

dina bhavishya read your daily horoscope predictions for May 23 2024
ಭವಿಷ್ಯ2 days ago

Dina Bhavishya : 12 ರಾಶಿಯವರ ಇಂದಿನ ಭವಿಷ್ಯ ಹೇಗಿದೆ? ಯಾರಿಗೆ ಶುಭ, ಯಾರಿಗೆ ಅಶುಭ ಫಲ?

Karnataka Weather Forecast
ಮಳೆ2 days ago

Karnataka Weather : ಮುಂದುವರಿಯಲಿದೆ ವರುಣಾರ್ಭಟ; ಬೆಂಗಳೂರಲ್ಲೂ ಭಾರಿ ಮಳೆ ನಿರೀಕ್ಷೆ!

Karnataka Rain
ಮಳೆ3 days ago

Karnataka Rain : ಭಾರಿ ಮಳೆಗೆ ಕರೆಂಟ್‌ ಕಟ್‌, ಕತ್ತಲಲ್ಲೇ ರೋಗಿಗಳಿಗೆ ಟ್ರೀಟ್‌ಮೆಂಟ್‌; ಮರ ಬಿದ್ದರೂ ಪಾರಾದ ತಾಯಿ-ಮಗ

Love Case Father throws hot water on man who loved his daughter for coming home
ಕೊಡಗು3 days ago

Love Case : ಮನೆಗೆ ಬಂದ ಪ್ರೇಮಿಗೆ ಕೊತ ಕೊತ ಕುದಿಯುವ ನೀರು ಎರಚಿದ ಯುವತಿ ತಂದೆ!

Contaminated Water
ಮೈಸೂರು3 days ago

Contaminated Water : ಡಿ ಸಾಲುಂಡಿಯಲ್ಲಿ ಕಲುಷಿತ ನೀರು ಸೇವಿಸಿ ಅಸ್ವಸ್ಥಗೊಂಡಿದ್ದ ಯುವಕ ಸಾವು

Karnataka Rain
ಮಳೆ4 days ago

Karnataka Rain : ಬಂಗಾಳ ಕೊಲ್ಲಿಯಲ್ಲಿ ವಾಯುಭಾರ ಕುಸಿತ; ಸಮುದ್ರಕ್ಕಿಳಿಯದಂತೆ ಮೀನುಗಾರರಿಗೆ ಎಚ್ಚರಿಕೆ

Karnataka Rain
ಮಳೆ5 days ago

Karnataka Rain : ಒಂದೇ ಮಳೆಗೆ ಹೊಳೆಯಂತಾದ ಬೆಂಗಳೂರು ರಸ್ತೆಗಳು! ಕಳಸದಲ್ಲೂ ಮುಂದುವರಿದ ಅಬ್ಬರ

Karnataka rain
ಮಳೆ5 days ago

Karnataka Rain : ವಿಜಯನಗರದಲ್ಲಿ ಸಿಡಿಲಿಗೆ ಜಾನುವಾರು ಬಲಿ; ಬೆಂಗಳೂರು ಸೇರಿ ಹಲವೆಡೆ ಭಾರಿ ಮಳೆ

Karnataka Rain
ಮಳೆ5 days ago

Karnataka Rain: ಧಾರಾಕಾರ ಮಳೆಗೆ ಕಾಂಪೌಂಡ್ ಕುಸಿದು 4 ಬೈಕ್‌ಗಳು ಜಖಂ; ಮದುವೆ ಮಂಟಪಕ್ಕೆ ನುಗ್ಗಿದ ನೀರು‌

Prajwal Revanna Case JDS calls CD Shivakumar pen drive gang
ರಾಜಕೀಯ7 days ago

Prajwal Revanna Case: CD ಶಿವಕುಮಾರ್ ಪೆನ್ ಡ್ರೈವ್ ಗ್ಯಾಂಗ್ ಎಂದ ಕುಟುಕಿದ ಜೆಡಿಎಸ್‌!

ಟ್ರೆಂಡಿಂಗ್‌