Viral News: 1969ರಲ್ಲಿ ಮಾಡಿದ್ದ ಪೋಸ್ಟ್‌ 2023ರಲ್ಲಿ ವಿಳಾಸಕ್ಕೆ ತಲುಪಿತು! ಇದೆಂಥ ವಿಚಿತ್ರ ಸ್ವಾಮಿ - Vistara News

ವೈರಲ್ ನ್ಯೂಸ್

Viral News: 1969ರಲ್ಲಿ ಮಾಡಿದ್ದ ಪೋಸ್ಟ್‌ 2023ರಲ್ಲಿ ವಿಳಾಸಕ್ಕೆ ತಲುಪಿತು! ಇದೆಂಥ ವಿಚಿತ್ರ ಸ್ವಾಮಿ

1969ರಲ್ಲಿ ಮಾಡಲಾಗಿದ್ದ ಅಂಚೆಯೊಂದು ಇದೀಗ ವಿಳಾಸಕ್ಕೆ ತಲುಪಿರುವ ವಿಶೇಷ ಘಟನೆ ಅಮೆರಿಕದಲ್ಲಿ ನಡೆದಿದೆ. ಅದರ ವಿಚಾರ ಎಲ್ಲೆಡೆ ವೈರಲ್‌ (Viral News) ಆಗಿದೆ.

VISTARANEWS.COM


on

1969 post delivered in 2023
ಮಹತ್ವದ, ಕುತೂಹಲಕರ ಸುದ್ದಿಗಾಗಿ ಫಾಲೊ ಮಾಡಿ
Koo

ವಾಷಿಂಗ್ಟನ್‌: ಅಂಚೆ ಮಾಡುವುದೆಲ್ಲ ಈಗಿನ ಕಾಲಕ್ಕೆ ʼಟೂ ಓಲ್ಡ್‌ʼ ಎನ್ನುವಂತಹ ಸಂಪ್ರದಾಯ. ಆದರೆ ಹಿಂದಿನ ಕಾಲದಲ್ಲಿ ಆ ಅಂಚೆಯೇ ಜನರ ಸಂಪರ್ಕದ ಸಂಪನ್ಮೂಲವಾಗಿತ್ತು. ಏನೇ ಆದರೂ ಅಂಚೆ ಮೂಲಕವೇ ಅದನ್ನು ದೂರದೂರವರಿಗೆ ತಿಳಿಸಬೇಕಿತ್ತು. ಕೆಲವೊಮ್ಮೆ ಅಂಚೆ ಸರಿಯಾದ ಸಮಯಕ್ಕೆ ತಲುಪಿತ್ತಾದರೂ ಎಷ್ಟೋ ಬಾರಿ ಲೇಟಾಗಿ ತಲುಪಿ ಉಪಯೋಗವೇ ಇಲ್ಲದಂತಾಗುತ್ತಿತ್ತು. ಅದೇ ರೀತಿ ಅಮೆರಿಕದಲ್ಲಿ 1969ರಲ್ಲಿ ಮಾಡಲಾಗಿದ್ದ ಪೋಸ್ಟ್‌ ಒಂದು ಇದೀಗ ಅಂದರೆ 2023ರಲ್ಲಿ ವಿಳಾಸಕ್ಕೆ (Viral News) ತಲುಪಿದೆ!

ಹೌದು. ಬರೋಬ್ಬರಿ 54 ವರ್ಷಗಳ ನಂತರ ಪೋಸ್ಟ್‌ ಒಂದು ಅದರ ವಿಳಾಸಕ್ಕೆ ತಲುಪಿದೆ. ಆದರೆ ಈಗ ಆ ವಿಳಾಸದಲ್ಲಿ ಬೇರೆಯ ಕುಟುಂಬವೇ ಇದೆ. ಗ್ಯಾಗ್ನೋನ್ಸ್‌ ಹೆಸರಿಗೆ ಪೋಸ್ಟ್‌ ಬಂದಿದ್ದು ಅದು ಯಾರು ಎನ್ನುವುದು ಕೂಡ ಅಂಚೆ ಪಡೆದವರಿಗೆ ತಿಳಿದಿಲ್ಲವಂತೆ. ಈ ವಿಚಾರವಾಗಿ ಅವರು ಫೇಸ್‌ಬುಕ್‌ನಲ್ಲಿ ಪೋಸ್ಟ್‌ ಹಂಚಿಕೊಂಡಿದ್ದಾರೆ.

ಇದನ್ನೂ ಓದಿ: Viral Video : ಅಪ್ಪ ನಾನೀಗ ಡಾಕ್ಟರ್‌ ಎಂದ ಮಗಳು! ಭಾವುಕರಾದ ತಂದೆ!

“ಇದೊಂದು ವಿಚಿತ್ರ. ನಿಮಗ್ಯಾರಿಗಾದರೂ ಈ ಗ್ಯಾಗ್ನೋನ್ಸ್‌ ಯಾರು ಎಂದು ತಿಳಿದಿದ್ದರೆ ತಿಳಿಸಿ. ವಿಚಿತ್ರವೆಂದರೆ ಇದರಲ್ಲಿ ವಿಳಾಸದಲ್ಲಿ ಗ್ಯಾಗ್ನೋನ್ಸ್‌ ಅಥವಾ ಆ ವಿಳಾಸದಲ್ಲಿ ಯಾರಿದ್ದಾರೋ ಅವರಿಗೆ ಎಂದು ಬರೆಯಲಾಗಿದೆ” ಎಂದು ಪೋಸ್ಟ್‌ ಪಡೆದ ಜೆಸ್ಸಿಕಾ ಮಾಹಿತಿ ನೀಡಿದ್ದಾರೆ. ಹಾಗೆಯೇ ಅವರ ಅಕ್ಕ ಪಕ್ಕದ ಮನೆಯವರ ಮಾಹಿತಿ ಪ್ರಕಾರ ಗ್ಯಾಗ್ನೋನ್ಸ್‌ ಅವರು ಜೆಸ್ಸಿಕಾ ಅವರ ಮನೆಯೆ ಮಾಜಿ ಮಾಲೀಕರಾಗಿದ್ದರಂತೆ. ಅವರು ಆ ಮನೆಯಲ್ಲಿ 90ರ ದಶಕದ ತನಕ ವಾಸವಿದ್ದರಂತೆ.

ಈ ಪೋಸ್ಟ್‌ ಸಾಮಾಜಿಕ ಜಾಲತಾಣಗಳಲ್ಲಿ ಭಾರಿ ಸದ್ದು ಮಾಡುತ್ತಿದೆ. ಜನರು ಈ ಅಂಚೆಯ ಬಗ್ಗೆ ಕುತೂಹಲವನ್ನು ವ್ಯಕ್ತಪಡಿಸಲಾರಂಭಿಸಿದ್ದಾರೆ. ಅದರಲ್ಲೂ ಪೋಸ್ಟ್‌ ಮೇಲೆ ಇತ್ತೀಚಿನ ಅಂಚೆ ಚೀಟಿ ಇರುವ ಬಗ್ಗೆಯೂ ಚರ್ಚೆಗಳು ನಡೆಯುತ್ತಿವೆ. “ಹೀಗೆ ನಮಗೂ ನಮ್ಮ ಪೂರ್ವಜರ ಯಾವುದಾದರೂ ಅಂಚೆ ಸಿಗುವುದಾಗಿದ್ದರೆ ಅದೆಷ್ಟು ಕುತೂಹಲಕಾರಿಯಾಗಿರುತ್ತಿತ್ತು” ಎಂದು ಜನರು ಕಾಮೆಂಟ್‌ಗಳನ್ನು ಮಾಡಲಾರಂಭಿಸಿದ್ದಾರೆ. ಈ ಪೋಸ್ಟ್‌ ಅನ್ನು ಜೆಸ್ಸಿಕಾ ಅವರು ಫೇಸ್‌ಬುಕ್‌ನಲ್ಲಿ ಜುಲೈ 18ರಂದು ಹಂಚಿಕೊಂಡಿದ್ದಾರೆ. ಅಂದಿನಿಂದ ಇಂದಿನವರೆಗೆ ಪೋಸ್ಟ್‌ ಹಲವಾರು ಜನರಿಂದ ಲೈಕ್‌ಗಳನ್ನು ಪಡೆದುಕೊಂಡಿದೆ. ಹತ್ತಾರು ಮಂದಿ ವಿಧ ವಿಧದ ಕಾಮೆಂಟ್‌ಗಳನ್ನು ಪೋಸ್ಟ್‌ಗೆ ಮಾಡಿದ್ದಾರೆ.

ಕ್ಷಣ ಕ್ಷಣದ ಮಾಹಿತಿಗಾಗಿ Vistara News FaceBook ಪೇಜ್ ಫಾಲೋ ಮಾಡಿ
ಮಹತ್ವದ ಮಾಹಿತಿಗಾಗಿ ವಿಸ್ತಾರ ನ್ಯೂಸ್ ಆ್ಯಪ್ ಉಚಿತವಾಗಿ ಡೌನ್ ಲೋಡ್ ಮಾಡಿಕೊಳ್ಳಿ: Andriod App | IOS App
Continue Reading
Click to comment

Leave a Reply

Your email address will not be published. Required fields are marked *

ವಿದೇಶ

Goat With Plastic Teeth: ಬಕ್ರೀದ್‌ಗೆ ಪ್ಲಾಸ್ಟಿಕ್‌ ಹಲ್ಲಿರುವ ಮೇಕೆ ಮಾರಲು ಯತ್ನಿಸಿದ ಪಾಕಿಸ್ತಾನಿ!

Goat With Plastic Teeth: ನೆರೆಯ ಪಾಕಿಸ್ತಾನದಲ್ಲಿ ವಿಚಿತ್ರ ಘಟನೆಯೊಂದು ನಡೆದಿದ್ದು, ಬಲಿ ಕೊಡಲು ಪ್ಲಾಸ್ಟಿಕ್‌ ಹಲ್ಲು ಹೊಂದಿರುವ ಮೇಕೆಯನ್ನು ಮಾರಾಟ ಮಾಡಿದ ವ್ಯಾಪಾರಿಯನ್ನು ಬಂಧಿಸಲಾಗಿದೆ. ಪಾಕಿಸ್ತಾನದ ಗುಲ್ಬರ್ಗ್ ಚೌರಂಗಿ ಪ್ರದೇಶದಲ್ಲಿ ಈ ಘಟನೆ ವರದಿಯಾಗಿದೆ. ಗ್ರಾಹಕರೊಬ್ಬರು ಆಡುಗಳ ಪೈಕಿ ಒಂದರಿಂದ ಪ್ಲಾಸ್ಟಿಕ್ ಹಲ್ಲುಗಳನ್ನು ತೆಗೆದು ಹಾಕುತ್ತಿರುವ ವಿಡಿಯೊ ಸೋಷಿಯಲ್‌ ಮೀಡಿಯಾದಲ್ಲಿ ಹರಿದಾಡಿ ವೈರಲ್‌ ಆಗಿತ್ತು. ಇದನ್ನು ಗಮನಿಸಿದ ಅಧಿಕಾರಿಗಳು ಕೂಡಲೇ ಕ್ರಮ ಕೈಗೊಂಡಿದ್ದಾರೆ ಎಂದು ಮೂಲಗಳು ತಿಳಿಸಿವೆ.

VISTARANEWS.COM


on

Goat With Plastic Teeth
Koo

ಇಸ್ಲಾಮಾಬಾದ್‌: ನೆರೆಯ ಪಾಕಿಸ್ತಾನದಲ್ಲಿ ವಿಚಿತ್ರ ಘಟನೆಯೊಂದು ನಡೆದಿದ್ದು, ಪ್ಲಾಸ್ಟಿಕ್‌ ಹಲ್ಲು ಹೊಂದಿರುವ ಮೇಕೆಯನ್ನು (Goat With Plastic Teeth) ಮಾರಾಟ ಮಾಡಿದ ವ್ಯಾಪಾರಿಯನ್ನು ಬಂಧಿಸಲಾಗಿದೆ. ಬಕ್ರೀದ್‌ ಹಿನ್ನೆಲೆಯಲ್ಲಿ ದೇಶಾದ್ಯಂತ ಮೇಕೆಗಳಿಗೆ ಬೇಡಿಕೆ ಹೆಚ್ಚಾಗಿದೆ. ಮೇಕೆಯನ್ನು ಬಲಿ ಕೊಡಲು ಬಳಸಲಾಗುತ್ತದೆ. ಇದೇ ವೇಳೆ ಈ ವ್ಯಾಪಾರಿ ಬಲಿ ಕೊಡಲು ಪ್ಲಾಸ್ಟಿಕ್‌ ಹಲ್ಲು ಹೊಂದಿರುವ ಮೇಕೆಯನ್ನು ಮಾರಾಟ ಮಾಡಿ ಸಿಕ್ಕಿ ಬಿದ್ದಿದ್ದಾನೆ (Viral News).

ಪಾಕಿಸ್ತಾನದ ಗುಲ್ಬರ್ಗ್ ಚೌರಂಗಿ ಪ್ರದೇಶದಲ್ಲಿ ಈ ಘಟನೆ ವರದಿಯಾಗಿದೆ. ಗ್ರಾಹಕರೊಬ್ಬರು ಆಡುಗಳ ಪೈಕಿ ಒಂದರಿಂದ ಪ್ಲಾಸ್ಟಿಕ್ ಹಲ್ಲುಗಳನ್ನು ತೆಗೆದು ಹಾಕುತ್ತಿರುವ ವಿಡಿಯೊ ಸೋಷಿಯಲ್‌ ಮೀಡಿಯಾದಲ್ಲಿ ಹರಿದಾಡಿ ವೈರಲ್‌ ಆಗಿತ್ತು. ಇದನ್ನು ಗಮನಿಸಿದ ಅಧಿಕಾರಿಗಳು ಕೂಡಲೇ ಕ್ರಮ ಕೈಗೊಂಡಿದ್ದಾರೆ ಎಂದು ಮೂಲಗಳು ತಿಳಿಸಿವೆ.

ಬಂಧಿತ ವ್ಯಾಪಾರಿ ಹೈದರಾಬಾದ್ ಮತ್ತು ಕರಾಚಿ ಮೂಲದವನಾಗಿದ್ದು, ಪೊಲೀಸ್‌ ವಿಚಾರಣೆ ವೇಳೆ ಬಕ್ರೀದ್‌ಗೆ ಬಲಿ ಕೊಡಲಿರುವ ಮೇಕೆಗಳ ಮಾರಾಟದಲ್ಲಿ ಮೋಸ ಮಾಡಿರುವುದನ್ನು ಒಪ್ಪಿಕೊಂಡಿದ್ದಾನೆ. ತನಿಖೆಯ ಭಾಗವಾಗಿ ಪೊಲೀಸರು ಏಳು ಹೆಚ್ಚುವರಿ ಮೇಕೆಗಳನ್ನು ವಶಪಡಿಸಿಕೊಂಡಿದ್ದಾರೆ.

ಪೊಲೀಸರು ಹೇಳಿದ್ದೇನು?

”ಕೃತಕ ಹಲ್ಲುಗಳನ್ನು ಹೊಂದಿರುವ ಮೇಕೆಯ ವಿಡಿಯೊ ಸೋಷಿಯಲ್‌ ಮೀಡಿಯಾದಲ್ಲಿ ಹರಿದಾಡಿ ನಮ್ಮ ಗಮನಕ್ಕೆ ಬಂದಿತ್ತು. ವಿಚಾರಣೆ ನಡೆಸಿದಾಗ ಬಲಿ ಕೊಡುವ ಉದ್ದೇಶಕ್ಕಾಗಿ ಈ ಮೇಕೆಯನ್ನು ಮಾರಾಟ ಮಾಡಲಾಗಿದೆ ಎನ್ನುವ ಅಂಶ ತಿಳಿದು ಬಂತು. ಕೂಡಲೇ ಕ್ರಮ ಕೈಗೊಂಡ ಮೋಸ ಎಸಗಿದ ವ್ಯಾಪಾರಿಯನ್ನು ವಸಕ್ಕೆ ಪಡೆದಿದ್ದೇವೆʼʼ ಎಂದು ಪೊಲೀಸರು ಮಾಹಿತಿ ನೀಡಿದ್ದಾರೆ.

ವಿಚಾರಣೆ ವೇಳೆ ಆತ ತಾನು ಹೈದರಾಬಾದ್‌ ಮೂಲದವನೆಂದೂ ಬಕ್ರೀದ್‌ ಸಂದರ್ಭದಲ್ಲಿ ತನ್ನಲ್ಲಿರುವ ಮೇಕೆಗಳನ್ನು ಮಾರಾಟ ಮಾಡಲು ಕರಾಚಿಗೆ ತೆರಳಿದ್ದಾಗಿ ಬಾಯ್ಬಿಟ್ಟಿದ್ದಾನೆ ಎಂದು ಪೊಲೀಸರು ವಿವರಿಸಿದ್ದಾರೆ. ಸದ್ಯ ಈ ಬಗ್ಗೆ ಹೆಚ್ಚಿನ ತನಿಖೆ ನಡೆಯುತ್ತಿದೆ.

ಪಾಕಿಸ್ತಾನದಲ್ಲಿ ಜೂನ್‌ 17ರಂದು ಬಕ್ರೀದ್‌ ಆಚರಿಸಲಾಗುತ್ತಿದೆ. ಜೂನ್ 7 ರಂದು ಜಿಲ್ಲಾ ಹಜ್ ಚಂದ್ರನ ದರ್ಶನದ ನಂತರ ಜೂನ್ 17ರಂದು ನಿಗದಿಯಾಗಿರುವ ಬಕ್ರೀದ್‌ ಮುಸ್ಲಿಮರ ಮಹತ್ವದ ಧಾರ್ಮಿಕ ಹಬ್ಬವಾಗಿದ್ದು, ಪ್ರಾಣಿಗಳನ್ನು ಬಲಿ ನೀಡುವ ಮೂಲಕ ಪ್ರವಾದಿ ಇಬ್ರಾಹಿಂ ದೇವರನ್ನು ಸ್ಮರಿಸಲಾಗುತ್ತದೆ. ಬಳಿಕ ಬಲಿ ಕೊಟ್ಟ ಪ್ರಾಣಿಯ ಮಾಂಸವನ್ನು ಸಾಂಪ್ರದಾಯಿಕವಾಗಿ ಹಂಚಿಕೊಳ್ಳಲಾಗುತ್ತದೆ. ಹೀಗಾಗಿ ಬಲಿ ಕೊಡಲು ಮೇಕೆಗಳಿಗೆ ಬೇಡಿಕೆ ಹೆಚ್ಚಿದೆ. ಬಲಿ ಕೊಡಲು ಪರಿಶುದ್ಧ ಮೇಕೆಯನ್ನೇ ಆಯ್ಕೆ ಮಾಡಿಕೊಳ್ಳಬೇಕೆಂಬ ನಿಯಮವಿದ್ದು, ಈತ ಲಾಭ ಮಾಡುವ ಉದ್ದೇಶದಿಂದ ಪ್ಲಾಸ್ಟಿಕ್‌ ಹಲ್ಲು ಹೊಂದಿರುವ ಮೇಕೆಯನ್ನು ಮಾರಾಟ ಮಾಡಿದ್ದ.

ಇದನ್ನೂ ಓದಿ: Donkey Population In Pak: ಹೆಚ್ಚುಹೆಚ್ಚು ಕತ್ತೆಗಳನ್ನು ಸಾಕಿ, ಆರ್ಥಿಕ ಬಿಕ್ಕಟ್ಟಿನಿಂದ ಪಾರಾಗಿ; ಪಾಕ್‌ಗೆ ಚೀನಾ ಸಲಹೆ!

ಕತ್ತೆಗಳ ಸಂಖ್ಯೆ ಹೆಚ್ಚಳ

ತೀವ್ರ ಆರ್ಥಿಕ ಬಿಕ್ಕಟ್ಟಿಗೆ ಸಿಲುಕಿರುವ ಪಾಕಿಸ್ತಾನದಲ್ಲಿ ಕಳೆದ ಒಂದು ವರ್ಷದಲ್ಲಿ ಕತ್ತೆಗಳ ಪ್ರಮಾಣ ಗಣನೀಯವಾಗಿ ಏರಿಕೆಯಾಗಿದ್ದು, ಇದು ದೇಶದ ಕೃಷಿ ಚಟುವಟಿಕೆಗಳಲ್ಲಿ ಆಶಾದಾಯಕ ಬೆಳವಣಿಗೆಯನ್ನು ತೋರಿಸಿದೆ. ಕತ್ತೆಗಳ ಸಂಖ್ಯೆಯು 2022-23ರ ಆರ್ಥಿಕ ವರ್ಷದಲ್ಲಿ 5.9 ಮಿಲಿಯನ್‌ ತಲುಪಿದ್ದು, ಹಿಂದಿನ ಅವಧಿಯಲ್ಲಿ 5.7 ಮಿಲಿಯನ್‌ ನಷ್ಟಿತ್ತು. ಒಂದು ವರ್ಷದಲ್ಲಿ ಕತ್ತೆಗಳ ಸಂಖ್ಯೆ ಸರಿಸುಮಾರು ಎರಡು ಲಕ್ಷ ಹೆಚ್ಚಳವಾಗಿದೆ.

Continue Reading

ವೈರಲ್ ನ್ಯೂಸ್

Viral News: ಮಾನವನ ಬೆರಳಾಯ್ತು, ಇದೀಗ ಐಸ್‌ಕ್ರೀಂನಲ್ಲಿ ಹುಳ ಪತ್ತೆ; ಇನ್ನು ಈ ಕಣ್ಣಲ್ಲಿ ಏನೇನು ನೋಡಬೇಕಪ್ಪ ಎಂದ ನೆಟ್ಟಿಗರು

Viral News: ನೀವು ಐಸ್‌ಕ್ರೀಂ ಪ್ರಿಯರೆ? ಹಾಗಾದರೆ ಈ ಸುದ್ದಿಯನ್ನು ನೀವು ಓದಲೇ ಬೇಕು. ಉತ್ತರ ಪ್ರದೇಶದ ಮಹಿಳೆಯೊಬ್ಬರು ಆನ್‌ಲೈನ್‌ ಮೂಲಕ ಆರ್ಡರ್‌ ಮಾಡಿ ತರಿಸಿದ ಐಸ್‌ಕ್ರೀಂನಲ್ಲಿ ಜರಿಹುಳ ಪತ್ತೆಯಾಗಿದೆ. ಸದ್ಯ ಈ ಫೋಟೊ, ವಿಡಿಯೊ ಸೋಷಿಯಲ್‌ ಮೀಡಿಯಾದಲ್ಲಿ ವೈರಲ್‌ ಆಗಿದೆ. ಕೆಲವು ದಿನಗಳ ಹಿಂದೆ ಮುಂಬೈಯ ಮಹಿಳೆಯೊಬ್ಬರು ಆನ್‌ಲೈನ್‌ನಲ್ಲಿ ಆರ್ಡರ್ ಮಾಡಿ ತರಿಸಿದ ಐಸ್‌ಕ್ರೀಂನಲ್ಲಿ ಮನುಷ್ಯನ ಕೈ ಬೆರಳು ಪತ್ತೆಯಾಗಿತ್ತು. ಆ ಘಟನೆ ಮರೆಯಾಗುವ ಮುನ್ನವೇ ಈ ಬೆಳವಣಿಗೆ ನಡೆದಿರುವುದು ಆತಂಕ ಮೂಡಿಸಿದೆ. ಆಹಾರ ಸುರಕ್ಷತೆಯ ಬಗ್ಗೆ ಪ್ರಶ್ನೆ ಏಳುವಂತೆ ಮಾಡಿದೆ.

VISTARANEWS.COM


on

Viral News
Koo

ಲಕ್ನೋ: ಇತ್ತೀಚೆಗೆ ಮುಂಬೈಯ ಮಹಿಳೆಯೊಬ್ಬರು ಆನ್‌ಲೈನ್‌ನಲ್ಲಿ ಆರ್ಡರ್ ಮಾಡಿ ತರಿಸಿದ ಐಸ್‌ಕ್ರೀಂನಲ್ಲಿ ಮನುಷ್ಯನ ಕೈ ಬೆರಳು ಪತ್ತೆಯಾಗಿತ್ತು. ಈ ಶಾಕ್‌ನಿಂದ ಜನರು ಇನ್ನೂ ಹೊರ ಬಂದಿಲ್ಲ. ಅದಕ್ಕಿಂತ ಮೊದಲೇ ಇನ್ನೊಂದು ಅಂತಹ ಅವಾಂತರ ಎದುರಾಗಿದೆ. ಉತ್ತರ ಪ್ರದೇಶದ ನೋಯ್ಡಾದಲ್ಲಿ ಮಹಿಳೆಯೊಬ್ಬರು ಆನ್‌ಲೈನ್‌ ಮೂಲಕ ಆರ್ಡರ್‌ ಮಾಡಿ ತರಿಸಿದ ಪ್ರತಿಷ್ಠಿತ ಬ್ರ್ಯಾಂಡ್‌ನ ಐಸ್‌ಕ್ರೀಂನಲ್ಲಿ ಜರಿಹುಳ (Centipede) ಕಂಡು ಬಂದಿದೆ. ಸದ್ಯ ಈ ಫೋಟೊ ಸೋಷಿಯಲ್‌ ಮೀಡಿಯಾದಲ್ಲಿ ಸದ್ದು ಮಾಡುತ್ತಿದೆ (Viral News).

ಉತ್ತರ ಪ್ರದೇಶದ ನೋಯ್ಡಾ ಸೆಕ್ಟರ್‌ 12ರಲ್ಲಿ ವಾಸವಾಗಿರುವ ದೀಪಾ ದೇವಿ ಎನ್ನುವ ಮಹಿಳೆ ತನ್ನ 5 ವರ್ಷದ ಮಗನಿಗೆ ಮಾವಿನ ಹಣ್ಣಿನ ಮಿಲ್ಕ್‌ ಶೇಕ್‌ ಮಾಡಿಕೊಡಲು ಆನ್‌ಲೈನ್‌ ಆ್ಯಪ್‌ ಮೂಲಕ ವೆನಿಲ್ಲಾ ಪ್ಲೇವರ್‌ನ ಐಸ್‌ಕ್ರೀಂ ಆರ್ಡರ್‌ ಮಾಡಿದ್ದರು. ಕೆಲಚೇ ಹೊತ್ತಲ್ಲಿ ಪಾರ್ಸಲ್‌ ಏನೋ ಆಕೆಯ ಕೈ ಸೇರಿತು. ಆದರೆ ಬಾಕ್ಸ್‌ ಓಪನ್‌ ಮಾಡಿದಾಗ ಅವರಿಗೆ ಆಘಾತ ಎದುರಾಗಿತ್ತು. ಬಾಕ್ಸ್‌ನ ಮುಚ್ಚಳ ತೆರೆಯುತ್ತಿದ್ದಂತೆ ಐಸ್‌ಕ್ರೀಂನಲ್ಲಿ ಹುದುಗಿದ್ದ ಜರಿಹುಳ ಕಂಡು ಅವರು ಬೆಚ್ಚಿ ಬಿದ್ದಿದ್ದಾರೆ. ಐಸ್‌ಕ್ರೀಂ ಬಂದ ಖುಷಿ ಜರ್ರನೆ ಕರಗಿ ಹೋಗಿತ್ತು.

ವಿಡಿಯೊ ವೈರಲ್‌

ಐಸ್‌ಕ್ರೀಂ ಬಾಕ್ಸ್‌ ಮತ್ತು ಅದರಲ್ಲಿನ ಹುಳವನ್ನು ತೋರಿಸುವ ವಿಡಿಯೊ ವೈರಲ್‌ ಆಗಿದೆ. ವಿಡಿಯೊದಲ್ಲಿ ದೀಪ ದೇವಿ ಅವರು ಬಾಕ್ಸ್‌ ಮುಚ್ಚಳ ತೆರೆಯುತ್ತಿದ್ದಂತೆ ಅದರಲ್ಲಿ ಹುಳ ಇರುವುದು ಸ್ಪಷ್ಟವಾಗಿ ಕಂಡು ಬರುತ್ತಿದೆ. ಸದ್ಯ ಈ ಘಟನೆ ಆಹಾರ ಸುರಕ್ಷತೆಯ ಬಗ್ಗೆ ಪ್ರಶ್ನೆ ಮೂಡುವಂತೆ ಮಾಡಿದೆ. ದೇಶಾದ್ಯಂತ ವ್ಯಾಪಕ ಆಕ್ರೋಶವೂ ವ್ಯಕ್ತವಾಗಿದೆ. ಹುಳ ಪತ್ತೆಯಾಗಿರುವ ಕುರಿತು ದೀಪಾ ದೇವಿ ಅವರು ಡೆಲಿವರಿ ಮಾಡಿರುವ ಆ್ಯಪ್‌ಗೆ ದೂರು ನೀಡಿದ್ದು, ಕೂಡಲೇ ಅವರು ಹಣವನ್ನು ಹಿಂದಿರುಗಿಸಿದ್ದಾರೆ. ಜತೆಗೆ ಐಸ್‌ಕ್ರೀಂ ಕಂಪನಿಗೆ ಮಾಹಿತಿ ರವಾನಿಸಿದ್ದಾರೆ.

ಈ ವಿಷಯ ಹೊರ ಬೀಳುತ್ತಿದ್ದಂತೆ ಕ್ರಮಕ್ಕೆ ಮುಂದಾದ ಆಹಾರ ಸುರಕ್ಷತಾ ಅಧಿಕಾರಿಗಳ ತಂಡ ಸೆಕ್ಟರ್ -22 ರಲ್ಲಿರುವ ಆ್ಯಪ್‌ ಸ್ಟೋರ್‌ಗೆ ಭೇಟಿ ನೀಡಿ ಆ ಬ್ಯಾಚ್ ಐಸ್‌ಕ್ರೀಂ ಮಾರಾಟವನ್ನು ನಿಲ್ಲಿಸಿದೆ. ಜತೆಗೆ ಐಸ್‌ಕ್ರೀಂ ತಯಾರಿಕಾ ಕಂಪನಿ ವಿರುದ್ಧ ಕ್ರಮ ಕೈಗೊಳ್ಳುವುದಾಗಿ ಭರವಸೆ ನೀಡಿದೆ. ಈ ಬಗ್ಗೆ ಭಾನುವಾರ ಪ್ರಕರಣ ದಾಖಲಾಗಿದೆ. ಇನ್ನು ಐಸ್‌ಕ್ರೀಂನಲ್ಲಿ ಏನೇನು ಪತ್ತೆಯಾಗುತ್ತವೋ ಎಂದು ನೆಟ್ಟಿಗರು ಆತಂಕಗೊಂಡಿದ್ದಾರೆ.

ಇದನ್ನೂ ಓದಿ: Italian Parliament: ಇಟಲಿ ಪಾರ್ಲಿಮೆಂಟ್‌ನಲ್ಲಿ ಸಂಸದರ ಮಾರಾಮಾರಿ! ವಿಡಿಯೊ ನೋಡಿ

ಮಾನವನ ಬೆರಳು ಪತ್ತೆ

ಕೆಲವು ದಿನಗಳ ಹಿಂದೆ ಮುಂಬೈಯಲ್ಲಿ ಐಸ್‌ಕ್ರೀಂನಲ್ಲಿ ಮಾನವನ ಬೆರಳು ಪತ್ತೆಯಾಗಿತ್ತು. ಮುಂಬೈಯ ಮಲಾಡ್ ಪ್ರದೇಶದ ಮಹಿಳೆಯೊಬ್ಬಳು ದಿನಸಿ ವಸ್ತುಗಳ ಜತೆಗೆ ತನ್ನ ಸಹೋದರನಿಗಾಗಿ ಮೂರು ಬಟರ್ ಸ್ಕಾಚ್ ಕೋನ್ ಐಸ್‌ಕ್ರೀಂ ಅನ್ನು ಆನ್‌ಲೈನ್‌ನಲ್ಲಿ ಆರ್ಡರ್ ಮಾಡಿದ್ದರು. ಮನೆಗೆ ಬಂದ ಐಸ್‌ಕ್ರೀಂ ಅನ್ನು ಸಹೋದರ ಬಿಚ್ಚಿ ತಿನ್ನುವಾಗ ನಾಲಿಗೆಗೆ ಏನೋ ತಗುಲಿದ ಹಾಗೆ ಆಗಿತ್ತು. ಆಗ ಆತ ಸೂಕ್ಷ್ಮವಾಗಿ ನೋಡಿದಾಗ ಮನುಷ್ಯನ ಕೈ ಬೆರಳು ಕಂಡು ಬಂದಿತ್ತು. ಅದು ಸುಮಾರು 2 ಸೆಂಟಿಮೀಟರ್ ಉದ್ದವಿತ್ತು. ಮಹಿಳೆಯ ಸಹೋದರ ವೈದ್ಯನಾಗಿದ್ದ ಕಾರಣ ಆತ ಅದು ಮನುಷ್ಯನ ಕೈ ಬೆರಳು ಎಂದು ಕೂಡಲೇ ಪತ್ತೆ ಹಚ್ಚಿದ್ದ. ಈ ಸುದ್ದಿ ದೇಶಾದ್ಯಂತ ವ್ಯಾಪಕ ಚರ್ಚೆಗೆ ಕಾರಣವಾಗಿತ್ತು.

Continue Reading

ವೈರಲ್ ನ್ಯೂಸ್

Shivraj Chouhan: ರೈಲಿನಲ್ಲಿ ಜನ ಸಾಮಾನ್ಯರಂತೆ ಪ್ರಯಾಣಿಸಿ ಸರಳತೆ ಮೆರೆದ ಶಿವರಾಜ್‌ ಸಿಂಗ್‌ ಚೌಹಾಣ್‌; ಸಚಿವರ ನಡೆಗೆ ವ್ಯಾಪಕ ಪ್ರಶಂಸೆ

Shivraj Chouhan: ಕೇಂದ್ರ ಕೃಷಿ ಮತ್ತು ರೈತರ ಕಲ್ಯಾಣ ಸಚಿವರಾಗಿ ಮಧ್ಯ ಪ್ರದೇಶದ ಮಾಜಿ ಮುಖ್ಯಮಂತ್ರಿ ಶಿವರಾಜ್ ಸಿಂಗ್ ಚೌಹಾಣ್ ಆಯ್ಕೆಯಾಗಿದ್ದಾರೆ. ದೆಹಲಿಯಿಂದ ಅವರು ಭೋಪಾಲ್‌ಗೆ ರೈಲಿನಲ್ಲಿ ತೆರಳಿದ್ದು, ಫೋಟೊಗಳನ್ನು ಹಂಚಿಕೊಂಡಿದ್ದಾರೆ. ಜನ ಸಾಮಾನ್ಯರೊಂದಿಗೆ ಬೆರೆತು ಪ್ರಯಾಣ ಬೆಳೆಸಿದ ಅವರ ಸರಳತೆಗೆ ವ್ಯಾಪಕ ಪ್ರಶಂಸೆ ವ್ಯಕ್ತವಾಗುತ್ತಿದೆ. ಶಿವರಾಜ್ ಸಿಂಗ್ ಚೌಹಾಣ್ ಅವರು 2024ರ ಲೋಕಸಭಾ ಚುನಾವಣೆಯಲ್ಲಿ ವಿದಿಶಾ ಕ್ಷೇತ್ರದಿಂದ ಸ್ಪರ್ಧಿಸಿ ಕಾಂಗ್ರೆಸ್‌ನ ಪ್ರತಾಪ್ ಭಾನು ಶರ್ಮಾ ಅವರ ವಿರುದ್ಧ ಬರೋಬ್ಬರಿ 8.2 ಲಕ್ಷ ಮತಗಳ ಅಂತರದಿಂದ ಗೆದ್ದಿದ್ದಾರೆ.

VISTARANEWS.COM


on

Shivraj Chouhan
Koo

ಭೋಪಾಲ್‌: ಕೇಂದ್ರ ಸಚಿವ, ಮಧ್ಯ ಪ್ರದೇಶದ ಮಾಜಿ ಮುಖ್ಯಮಂತ್ರಿ ಶಿವರಾಜ್‌ ಸಿಂಗ್‌ ಚೌಹಾಣ್‌ (Shivraj Chouhan) ರೈಲಿನಲ್ಲಿ ಸಾಮಾನ್ಯರಂತೆ ಪ್ರಯಾಣ ಬೆಳೆಸಿರುವ ವಿಡಿಯೊ ಸದ್ಯ ವೈರಲ್‌ ಆಗಿದೆ. ಕೇಂದ್ರ ಸಚಿವರ ಸರಳತೆಗೆ ಮೆಚ್ಚುಗೆ ವ್ಯಕ್ತವಾಗಿದೆ (Viral News). ಲೋಕಸಭಾ ಚುನಾವಣೆಯಲ್ಲಿ ತಮ್ಮ ತವರು ಕ್ಷೇತ್ರ ವಿದಿಶಾದಿಂದ ಜಯಗಳಿಸಿರುವ ಅವರು ದೆಹಲಿಯಿಂದ ಭೋಪಾಲ್‌ಗೆ ರೈಲಿನಲ್ಲಿ ತೆರಳಿದರು.

ಶಿವರಾಜ್‌ ಸಿಂಗ್‌ ಚೌಹಾಣ್‌ ಅವರು ತಮ್ಮ ಪತ್ನಿಯೊಂದಿಗೆ ದೆಹಲಿಯಿಂದ ಶತಾಬ್ದಿ ಎಕ್ಸ್‌ಪ್ರೆಸ್‌ನಲ್ಲಿ ಸಂಚರಿಸಿದ್ದು, ಪ್ರಯಾಣದ ವೇಳೆ ರೈಲಿನಲ್ಲಿದ್ದ ಸಹಯಾತ್ರಿಕರೊಂದಿಗೆ ನಗು ನಗುತ್ತಾ ಮಾತನಾಡಿದರು. ಚಿಕ್ಕ ಮಕ್ಕಳನ್ನು ಎತ್ತಿ ಮುದ್ದಾಡಿ, ಫೋಟೊಗಳಿಗೆ ಪೋಸ್ ನೀಡಿದರು. ಕೆಲವರು ಅವರೊಂದಿಗೆ ಸೆಲ್ಫಿ ಕ್ಲಿಕ್ಕಿಸುತ್ತಿರುವುದು ಸಹ ಕಂಡುಬಂತು.

ಸಾಮಾಜಿಕ ಜಾಲತಾಣ ಎಕ್ಸ್‌ನಲ್ಲಿ ತಮ್ಮ ರೈಲು ಪ್ರಯಾಣದ ಚಿತ್ರಗಳನ್ನು ಹಂಚಿಕೊಂಡಿರುವ ಶಿವರಾಜ್‌ ಸಿಂಗ್‌ ಚೌಹಾಣ್‌ ಅವರು, ಭಾರತೀಯ ರೈಲ್ವೆ ಇಲಾಖೆಯಲ್ಲಿ ಕ್ರಾಂತಿಕಾರಕ ಬದಲಾವಣೆಗಳನ್ನು ತಂದ ಪ್ರಧಾನ ಮಂತ್ರಿ ನರೇಂದ್ರ ಮೋದಿ ಮತ್ತು ರೈಲ್ವೆ ಸಚಿವ ಅಶ್ವಿನಿ ವೈಷ್ಣವ್‌ ಅವರ ಕಾರ್ಯಕ್ಕೆ ಮೆಚ್ಚುಗೆ ಸೂಚಿಸಿದರು.

ʼʼಪ್ರಧಾನ ಮಂತ್ರಿ ನರೇಂದ್ರ ಮೋದಿ ಅವರ ಮಾರ್ಗದರ್ಶನದಲ್ಲಿ ಮತ್ತು ರೈಲ್ವೆ ಸಚಿವ ಅಶ್ವಿನಿ ವೈಷ್ಣವ್‌ ಅವರ ಮುಂದಾಳತ್ವದಲ್ಲಿ ಭಾರತೀಯ ರೈಲ್ವೆ ನಿರ್ವಹಣೆ ಮತ್ತು ಕಾರ್ಯಾಚರಣೆಯ ಎಲ್ಲ ಕ್ಷೇತ್ರಗಳಲ್ಲಿ ಕ್ರಾಂತಿಕಾರಿ ಬದಲಾವಣೆಗಳಿಗೆ ಸಾಕ್ಷಿಯಾಗಿದೆ. ನವ ಭಾರತದ ವೇಗದ ಅಗತ್ಯಗಳನ್ನು ಪೂರೈಸಲು ಮತ್ತು ಪ್ರಯಾಣವನ್ನು ಸುರಕ್ಷಿತ ಮತ್ತು ಆರಾಮದಾಯಕವಾಗಿಸಲು ಭಾರತೀಯ ರೈಲ್ವೆ ನಿರಂತರವಾಗಿ ಕೆಲಸ ಮಾಡುತ್ತಿದೆ” ಎಂದು ಅವರು ಬರೆದುಕೊಂಡಿದ್ದಾರೆ.

ಕಳೆದ ವರ್ಷ ನಡೆದ ಮಧ್ಯ ಪ್ರದೇಶ ವಿಧಾನಸಭಾ ಚುನಾವಣೆಯಲ್ಲಿ ಬಿಜೆಪಿಯ ಭರ್ಜರಿ ಗೆಲುವಿನಲ್ಲಿ ಶಿವರಾಜ್ ಸಿಂಗ್ ಚೌಹಾಣ್ ಅವರು ಪ್ರಧಾನ ಪಾತ್ರ ವಹಿಸಿದ್ದರು. ಮುಖ್ಯಮಂತ್ರಿಯಾಗಿ ಹಲವು ಜನಪರ ಯೋಜನೆಯನ್ನು ರಾಜ್ಯದಲ್ಲಿ ಜಾರಿಗೊಳಿಸಿದ ಖ್ಯಾತಿ ಅವರದ್ದು. ಸದ್ಯ ಶಿವರಾಜ್ ಸಿಂಗ್ ಚೌಹಾಣ್ ಅವರು ಸತತ ಮೂರನೇ ಬಾರಿ ಅಧಿಕಾರಕ್ಕೆ ಬಂದ ಎನ್‌ಡಿಎ ಸರ್ಕಾರದಲ್ಲಿ ಕೃಷಿ ಮತ್ತು ರೈತರ ಕಲ್ಯಾಣ ಸಚಿವರಾಗಿ ಆಯ್ಕೆಯಾಗಿದ್ದಾರೆ. ಬುಡಕಟ್ಟು ನಾಯಕ ಅರ್ಜುನ್ ಮುಂಡಾ ಅವರ ಬದಲಿಗೆ ಶಿವರಾಜ್ ಸಿಂಗ್ ಚೌಹಾಣ್ ಅವರು ಈ ಹೊಣೆ ಹೊತ್ತಿದ್ದಾರೆ.

ಶಿವರಾಜ್ ಸಿಂಗ್ ಚೌಹಾಣ್ ಅವರು 2024ರ ಲೋಕಸಭಾ ಚುನಾವಣೆಯಲ್ಲಿ ವಿದಿಶಾ ಕ್ಷೇತ್ರದಿಂದ ಸ್ಪರ್ಧಿಸಿ ಕಾಂಗ್ರೆಸ್‌ನ ಪ್ರತಾಪ್ ಭಾನು ಶರ್ಮಾ ಅವರ ವಿರುದ್ಧ ಬರೋಬ್ಬರಿ 8.2 ಲಕ್ಷ ಮತಗಳ ಅಂತರದಿಂದ ಗೆದ್ದಿದ್ದಾರೆ.

ಇದನ್ನೂ ಓದಿ: MP Urinating Case: ಮೂತ್ರ ವಿಸರ್ಜನೆ ಕೇಸ್;‌ ಆದಿವಾಸಿ ವ್ಯಕ್ತಿಯ ಕಾಲು ತೊಳೆದ ಸಿಎಂ ಶಿವರಾಜ್‌ ಸಿಂಗ್‌ ಚೌಹಾಣ್;‌ ವಿಡಿಯೊ ವೈರಲ್

ಶಿವರಾಜ್ ಸಿಂಗ್ ಚೌಹಾಣ್‌ಗೆ ಸಿಗದ ಸಿಎಂ ಹುದ್ದೆ; ಬಿಕ್ಕಿ ಬಿಕ್ಕಿ ಅತ್ತ ಮಹಿಳೆಯರು!

ಕಳೆದ ಡಿಸೆಂಬರ್‌ನಲ್ಲಿ ನಡೆದ ವಿಧಾನಸಭಾ ಚುನಾವಣೆಯಲ್ಲಿ ಬಿಜೆಪಿ ಭರ್ಜರಿ ಬಹುಮತ ಪಡೆದು ಅಧಿಕಾರಕ್ಕೆ ಮರಳಿದ್ದರೂ ಮುಖ್ಯಮಂತ್ರಿಯಾಗಿ ಹೊಸ ಮುಖ ಮೋಹನ್ ಯಾದವ್ ಅವರನ್ನು ಆಯ್ಕೆ ಮಾಡಲಾಗಿತ್ತು. ನಿರ್ಗಮಿತ ಸಿಎಂ ಶಿವರಾಜ್ ಸಿಂಗ್ ಚೌಹಾಣ್ ಅವರು ರಾಜ್ಯಪಾಲ ಮುಂಗುಭಾಯ್ ಪಟೇಲ್ ಅವರಿಗೆ ರಾಜೀನಾಮೆ ಸಲ್ಲಿಸಿ ಹೊರ ಬಂದಾಗ ಮಹಿಳಾ ಅಭಿಮಾನಿಗಳು ಅವರನ್ನು ಭೇಟಿ ಮಾಡಿ ತಮ್ಮ ದುಃಖ ವ್ಯಕ್ತಪಡಿಸಿದ್ದರು. ಶಿವರಾಜ್ ಸಿಂಗ್ ಚೌಹಾಣ್ ಅವರನ್ನು ಅಪ್ಪಿಕೊಂಡ ಮಹಿಳೆಯರು ಬಿಕ್ಕಿ ಬಿಕ್ಕಿ ಅತ್ತಿರುವ ವಿಡಿಯೊ ವೈರಲ್ ಆಗಿತ್ತು.

Continue Reading

ದೇಶ

ರಾಹುಲ್‌ ಗಾಂಧಿ ‘ಟಕಾ ಟಕ್’‌ 1 ಲಕ್ಷ ರೂ.ಗಾಗಿ ಬ್ಯಾಂಕ್‌ಗೆ ನುಗ್ಗಿದ ನೂರಾರು ಸ್ತ್ರೀಯರು; ಬಳಿಕ ಆಗಿದ್ದೇನು?

ರಾಹುಲ್‌ ಗಾಂಧಿ ಅವರು ಬ್ಯಾಂಕ್‌ ಖಾತೆಗೆ ಒಂದು ಲಕ್ಷ ರೂ. ಜಮೆ ಮಾಡುತ್ತಾರೆ ಎಂದು ಕರ್ನಾಟಕದಲ್ಲಿ ಮುಸ್ಲಿಂ ಮಹಿಳೆಯರು ಪೋಸ್ಟ್‌ ಆಫೀಸ್‌ನಲ್ಲಿ ಬ್ಯಾಂಕ್‌ ಖಾತೆ ತೆರೆಯಲು ಮುಗಿಬಿದ್ದಿದ್ದರು. ಉತ್ತರ ಪ್ರದೇಶದಲ್ಲಂತೂ ಮಹಿಳೆಯರು ಕಾಂಗ್ರೆಸ್‌ಗೆ ಕಚೇರಿಗೆ ನುಗ್ಗಿದ್ದರು. ಈಗ ಬಿಹಾರದಲ್ಲೂ ಒಂದು ಲಕ್ಷ ರೂ. ಟಕಾಟಕ್‌ ಹಣಕ್ಕಾಗಿ ನೂರಾರು ಮಹಿಳೆಯರು ಬ್ಯಾಂಕ್‌ಗೆ ತೆರಳಿ, ನಿರಾಸೆಯಿಂದ ಮನೆಗೆ ವಾಪಸಾಗಿದ್ದಾರೆ ಎಂದು ತಿಳಿದುಬಂದಿದೆ.

VISTARANEWS.COM


on

Bihar Women
Koo

ಪಟನಾ: ಲೋಕಸಭೆ ಚುನಾವಣೆ (Lok Sabha Election 2024) ಮುಗಿದು, ಫಲಿತಾಂಶವೂ ಪ್ರಕಟವಾಗಿದೆ. ಎನ್‌ಡಿಎ ಮೈತ್ರಿಕೂಟಕ್ಕೆ ಬಹುಮತ ದೊರೆತ ಹಿನ್ನೆಲೆಯಲ್ಲಿ ಪ್ರಧಾನಿಯಾಗಿ ಪ್ರಮಾಣವಚನ ಸ್ವೀಕರಿಸಿದ ನರೇಂದ್ರ ಮೋದಿ (Narendra Modi) ಅವರು ಖಾತೆ ಹಂಚಿಕೆಯನ್ನೂ ಮಾಡಿ ಇಟಲಿಗೆ ತೆರಳಿದ್ದಾರೆ. ಇಷ್ಟಾದರೂ, ರಾಹುಲ್‌ ಗಾಂಧಿ ಅವರು ತಮ್ಮ ಖಾತೆಗೆ ಹಣ ಹಾಕುತ್ತಾರೆ ಎಂದೇ ಮಹಿಳೆಯರು ಭಾವಿಸಿದ್ದಾರೆ. ಇದಕ್ಕೆ ನಿದರ್ಶನ ಎಂಬಂತೆ, ಬಿಹಾರದಲ್ಲಿ ನೂರಾರು ಮಹಿಳೆಯರು ಪಾಸ್‌ಬುಕ್‌ ಹಿಡಿದುಕೊಂಡು, ನಮ್ಮ ಖಾತೆಗೆ ರಾಹುಲ್‌ ಗಾಂಧಿ (Rahul Gandhi) ಹೇಳಿದ ‘ಟಕಾಟಕ್’‌ 1 ಲಕ್ಷ ರೂ. ಜಮೆ ಮಾಡಿ ಎಂದು ಆಗ್ರಹಿಸಿದ್ದಾರೆ. ಕೊನೆಗೆ ಬಂದ ದಾರಿಗೆ ಸುಂಕವಿಲ್ಲ ಎಂದು ಮನೆಗೆ ತೆರಳಿದ್ದಾರೆ. ಈ ವಿಡಿಯೊ ಈಗ ಭಾರಿ ವೈರಲ್‌ ಆಗಿದೆ.

ದೇಶದಲ್ಲಿ ಕಾಂಗ್ರೆಸ್‌ ಅಧಿಕಾರಕ್ಕೆ ಬಂದರೆ ಬಡ ಮಹಿಳೆಯರ ಬ್ಯಾಂಕ್‌ ಖಾತೆಗೆ ಮಾಸಿಕ 8,500 ರೂ.ನಂತೆ ವರ್ಷಕ್ಕೆ ಒಂದು ಲಕ್ಷ ರೂ. ಜಮೆ ಮಾಡಲಾಗುವುದು ಎಂದು ಚುನಾವಣೆ ಪ್ರಚಾರದ ವೇಳೆ ಘೋಷಣೆ ಮಾಡಿದ್ದರು. ಬಿಹಾರದ ಕೈಮುರ್‌ನಲ್ಲಿ ರಾಹುಲ್‌ ಗಾಂಧಿ ಹೇಳಿದಂತೆ ಮಹಿಳೆಯರ ಬ್ಯಾಂಕ್‌ ಖಾತೆಗೆ ಹಣ ಜಮೆ ಮಾಡಲಾಗುತ್ತದೆ ಎಂಬ ವದಂತಿ ಹರಡಿದೆ. ಇದನ್ನು ನಂಬಿದ ನೂರಾರು ಮಹಿಳೆಯರು ಬ್ಯಾಂಕ್‌ ಎದುರು ಪಾಸ್‌ಬುಕ್‌ ಹಿಡಿದು, ನಮ್ಮ ಖಾತೆಗೆ ಒಂದು ಲಕ್ಷ ರೂ. ಜಮೆ ಮಾಡಿ ಎಂದು ಆಗ್ರಹಿಸಿದ್ದಾರೆ. ಕೊನೆಗೆ ಪೊಲೀಸರು ಬಂದು ವಾಸ್ತವ ತಿಳಿಸಿದಾಗ ಮಹಿಳೆಯರು ಹಿಡಿಶಾಪ ಹಾಕುತ್ತ ಮನೆಗೆ ತೆರಳಿದರು ಎನ್ನಲಾಗಿದೆ.

ರಾಹುಲ್‌ ಗಾಂಧಿ ಹೇಳಿದ್ದೇನು?

ಲೋಕಸಭೆ ಚುನಾವಣೆ ವೇಳೆ ಕಾಂಗ್ರೆಸ್‌ ನಾಯಕರ ರಾಹುಲ್‌ ಗಾಂಧಿ ಅವರು ಮಹಿಳೆಯರಿಗೆ 1 ಲಕ್ಷ ರೂ. ನೀಡುವ ಕುರಿತು ಹಲವು ಬಾರಿ ಘೋಷಣೆ ಮಾಡಿದ್ದರು. “ದೇಶದಲ್ಲಿ ಕಾಂಗ್ರೆಸ್‌ ಅಧಿಕಾರಕ್ಕೆ ಬಂದರೆ ಹೆಣ್ಣುಮಕ್ಕಳ ಬ್ಯಾಂಕ್‌ ಖಾತೆಗಳಿಗೆ ಮಾಸಿಕ 8,500 ರೂ.ನಂತೆ ವರ್ಷಕ್ಕೆ ಒಂದು ಲಕ್ಷ ರೂ. ನೀಡಲಾಗುತ್ತದೆ. ದೇಶದ ಬಡ ಮಹಿಳೆಯರ ಕಲ್ಯಾಣಕ್ಕಾಗಿ ಕಾಂಗ್ರೆಸ್‌ ಸರ್ಕಾರ ಈ ಯೋಜನೆಯನ್ನು ಜಾರಿಗೆ ತರುತ್ತದೆ. ಇದು ಕಾಂಗ್ರೆಸ್‌ ಗ್ಯಾರಂಟಿಯಾಗಿದೆ. ಟಕಾ ಟಕ್‌ ಅಂತ ಮಹಿಳೆಯರ ಖಾತೆಗೆ ಹಣ ಜಮೆಯಾಗಲಿದೆ” ಎಂಬುದಾಗಿ ಹೇಳಿದ್ದರು. ಹಾಗಾಗಿ, ಚುನಾವಣೆ ಮುಗಿದ ಕೂಡಲೇ ಮುಸ್ಲಿಂ ಮಹಿಳೆಯರು ಉತ್ತರ ಪ್ರದೇಶದ ಲಖನೌನಲ್ಲಿರುವ ಕಾಂಗ್ರೆಸ್‌ ಕಚೇರಿಗೆ ಲಗ್ಗೆ ಇಟ್ಟಿದ್ದರು.

ಕರ್ನಾಟಕದಲ್ಲೂ ಖಾತೆ ತೆರೆಯಲು ಕ್ಯೂ

ಕಾಂಗ್ರೆಸ್‌ನಿಂದ ಮಹಿಳೆಯರ ಬ್ಯಾಂಕ್‌ ಖಾತೆಗೆ 1 ಲಕ್ಷ ರೂ. ಜಮೆಯಾಗುತ್ತದೆ ಎಂದು ಭಾವಿಸಿ ಬೆಂಗಳೂರಿನ ಹಲವೆಡೆ ಮುಸ್ಲಿಂ ಮಹಿಳೆಯರು ಪೋಸ್ಟ್‌ ಆಫೀಸ್‌ ಎದುರು ಸಾಲಾಗಿ ನಿಂತಿರುವುದು ಕಂಡು ಬಂದಿತ್ತು. ಬೆಂಗಳೂರಿನ ಶಿವಾಜಿ ನಗರ, ವಸಂತನಗರ ಸೇರಿ ಹಲವೆಡೆ ಮುಸ್ಲಿಂ ಮಹಿಳೆಯರು ಬ್ಯಾಂಕ್‌ ಖಾತೆ ತೆರೆಯಲು ಪೋಸ್ಟ್‌ ಆಫೀಸ್‌ ಎದುರು ಸಾಲುಗಟ್ಟಿ ನಿಂತಿದ್ದರು. ಕಾಂಗ್ರೆಸ್‌ 1 ಲಕ್ಷ ರೂ. ಗ್ಯಾರಂಟಿ ಘೋಷಣೆ ಮಾಡಿದ ಹಿನ್ನೆಲೆಯಲ್ಲಿ ಬ್ಯಾಂಕ್‌ ಖಾತೆ ತೆರೆಯಲು ಮುಂದಾಗಿದ್ದರು.

ಇದನ್ನೂ ಓದಿ: Congress Guarantee: ಗ್ಯಾರಂಟಿಗಾಗಿ ದಾಖಲೆ ಅಪ್ಡೇಟ್‌; ಆಧಾರ್‌, ಬ್ಯಾಂಕ್‌, ಪೋಸ್ಟ್‌ ಆಫೀಸ್‌ಗೆ ಮುಗಿಬಿದ್ದ ಜನ

Continue Reading
Advertisement
Dina Bhavishya
ಭವಿಷ್ಯ16 mins ago

Dina Bhavishya : ಗೌಪ್ಯ ವಿಷಯವನ್ನು ಹಂಚಿಕೊಂಡರೆ ಈ ರಾಶಿಯವರಿಗೆ ಅಪಾಯ ಗ್ಯಾರಂಟಿ!

World War 3
ಪ್ರಮುಖ ಸುದ್ದಿ6 hours ago

World War 3: ಜೂನ್ 18ರಿಂದ 3ನೇ ಮಹಾಯುದ್ಧ ಶುರು; ಖ್ಯಾತ ಜ್ಯೋತಿಷಿಯ ಭವಿಷ್ಯವಾಣಿ ಸಂಚಲನ

Cholera outbreak
ಕರ್ನಾಟಕ8 hours ago

Cholera outbreak: ಕಲುಷಿತ ನೀರು ಸೇವನೆ; ಮಧುಗಿರಿಯ ಚಿನ್ನೇನಹಳ್ಳಿಯಲ್ಲಿ ವ್ಯಕ್ತಿಗೆ ಕಾಲರಾ ದೃಢ

NCERT Textbooks
ಪ್ರಮುಖ ಸುದ್ದಿ8 hours ago

NCERT Textbooks: ರಾಜಕೀಯ ಶಾಸ್ತ್ರದ ಪಠ್ಯದಿಂದ ‘ಬಾಬ್ರಿ ಮಸೀದಿ’ ಅಧ್ಯಾಯ ತೆಗೆದ ಎನ್‌ಸಿಇಆರ್‌ಟಿ!

Parenting Tips
ಪ್ರಮುಖ ಸುದ್ದಿ9 hours ago

Parenting Tips: ನೀವು ಹೊಸ ಅಪ್ಪ ಅಮ್ಮಂದಿರೇ? ನಿಮಗಿದೆ ಇಲ್ಲಿ ಮುಖ್ಯವಾದ ಟಿಪ್ಸ್!

Drowns in Lake
ಕರ್ನಾಟಕ9 hours ago

Drowns in lake: ಸ್ನೇಹಿತರ ಜತೆ ಕೆರೆಗೆ ಈಜಲು ಹೋದ ಬಾಲಕ ನೀರುಪಾಲು

Petrol Diesel Price
ಕರ್ನಾಟಕ10 hours ago

Petrol Diesel Price: ಪೆಟ್ರೋಲ್, ಡೀಸೆಲ್ ದರ ಏರಿಕೆಗೂ ಚುನಾವಣಾ ಫಲಿತಾಂಶಕ್ಕೂ ಸಂಬಂಧವಿಲ್ಲ ಎಂದ ಸಿಎಂ

Amit Shah
ದೇಶ10 hours ago

Amit Shah: ಕಾಶ್ಮೀರದಲ್ಲಿ ಒಬ್ಬನೇ ಒಬ್ಬ ಉಗ್ರ ಉಳಿಯಬಾರದು; ಖಡಕ್‌ ಆದೇಶ ಕೊಟ್ಟ ಅಮಿತ್‌ ಶಾ

Karnataka Weather Forecast
ಮಳೆ11 hours ago

Karnataka weather : ಭಾನುವಾರ ರಾಯಚೂರಿನಲ್ಲಿ ಅಬ್ಬರಿಸಿದ ವರುಣ; ನಾಳೆಗೂ ಇದೆ ಮಳೆ ಅಲರ್ಟ್‌

Actor Darshan
ಪ್ರಮುಖ ಸುದ್ದಿ11 hours ago

Actor Darshan: ರೇಣುಕಾಸ್ವಾಮಿ ಕುಟುಂಬಕ್ಕಷ್ಟೇ ಅಲ್ಲ, ಚಿತ್ರರಂಗಕ್ಕೂ ನ್ಯಾಯ ಸಿಗಬೇಕು: ಕಿಚ್ಚ ಸುದೀಪ್‌

Sharmitha Gowda in bikini
ಕಿರುತೆರೆ8 months ago

Geetha Serial Kannada: ನಿದ್ದೆ ಕದ್ದ ಚೋರಿ! ನಟಿ `ಭಾನುಮತಿ’ ಹಾಟ್‌ ಪೋಟೊಗಳಿಗೆ ಫ್ಯಾನ್ಸ್ ಫುಲ್ ಫಿದಾ

Kannada Serials
ಕಿರುತೆರೆ8 months ago

Kannada Serials TRP: 2ನೇ ಸ್ಥಾನದಲ್ಲಿ 2 ಧಾರಾವಾಹಿಗಳು; ಟಿಆರ್‌ಪಿ ರೇಸ್‌ನಲ್ಲಿಲ್ಲ ಭಾಗ್ಯಲಕ್ಷ್ಮೀ!

Bigg Boss- Saregamapa 20 average TRP
ಕಿರುತೆರೆ8 months ago

Kannada Serials TRP: ಏಳನೇ ಸ್ಥಾನಕ್ಕೆ ʻಅಮೃತಧಾರೆʼ ಕುಸಿತ; ಬಿಗ್‌ ಬಾಸ್‌-ಸರಿಗಮಪ ಟಿಆರ್‌ಪಿ ಎಷ್ಟು?

galipata neetu
ಕಿರುತೆರೆ7 months ago

Kanyadana Serial: ಕಿರುತೆರೆಗೆ ಮತ್ತೆ ಎಂಟ್ರಿ ಕೊಟ್ಟ ʻಗಾಳಿಪಟʼ ಖ್ಯಾತಿಯ ʻನೀತುʼ!

Kannada Serials
ಕಿರುತೆರೆ9 months ago

Kannada Serials TRP: ನಾಲ್ಕನೇ ಸ್ಥಾನಕ್ಕೆ ಕುಸಿತ ಕಂಡ ʻಸೀತಾ ರಾಮʼ; ಟಿಆರ್‌ಪಿ ರೇಸ್‌ಗೆ ʻಭಾಗ್ಯಲಕ್ಷ್ಮಿʼ ಬ್ಯಾಕ್‌!

Kannada Serials
ಕಿರುತೆರೆ8 months ago

Kannada Serials TRP: ಟಿಆರ್‌ಪಿಯಲ್ಲಿ ʻಭಾಗ್ಯಲಕ್ಷ್ಮೀʼ ಹವಾ; ʻಪುಟ್ಟಕ್ಕನ ಮಕ್ಕಳುʼ ಧಾರಾವಾಹಿಗೆ ಸಂಕಷ್ಟ!

Bigg Boss' dominates TRP; Sita Rama fell to the sixth position
ಕಿರುತೆರೆ8 months ago

Kannada Serials TRP: ಟಿಆರ್‌ಪಿಯಲ್ಲಿ ʻಬಿಗ್ ಬಾಸ್ʼದೇ ಮೇಲುಗೈ; 6ನೇ ಸ್ಥಾನಕ್ಕೆ ಕುಸಿದ ʻಸೀತಾ ರಾಮʼ

geetha serial Dhanush gowda engagement
ಕಿರುತೆರೆ6 months ago

Dhanush Gowda: ಗೀತಾ ಧಾರಾವಾಹಿ ನಟನ ನಿಶ್ಚಿತಾರ್ಥ; ಭವ್ಯಾಳ ಕಮೆಂಟ್‌ ಬಾಕ್ಸ್‌ ಆಫ್‌!

varun
ಕಿರುತೆರೆ7 months ago

Brindavana Serial: ʼಬೃಂದಾವನʼ ಧಾರಾವಾಹಿಯಲ್ಲಿ ದೊಡ್ಡ ಟ್ವಿಸ್ಟ್‌; ಪ್ರಮುಖ ಪಾತ್ರಧಾರಿಯೇ ಬದಲು

Kannada Serials
ಕಿರುತೆರೆ9 months ago

Kannada Serials TRP: ಟಿಆರ್‌ಪಿಯಲ್ಲಿ ಏರಿಕೆ ಕಂಡ ʻಅಮೃತಧಾರೆʼ; ʻಗಟ್ಟಿಮೇಳʼಕ್ಕೆ ನಾಲ್ಕನೇ ಸ್ಥಾನ!

Renukaswamy murder case The location of the accused is complete
ಸಿನಿಮಾ11 hours ago

Renuka Swamy murder : ಭೀಕರವಾಗಿ ಕೊಂದರೂ ಆರೋಪಿಗಳಿಗೆ ಕಾಡುತ್ತಿಲ್ವಾ ಪಾಪಪ್ರಜ್ಞೆ? ನಗುತ್ತಲೇ ಹೊರಬಂದ ಪವಿತ್ರಾ ಗೌಡ, ಪವನ್‌

Renuka swamy murder
ಚಿತ್ರದುರ್ಗ12 hours ago

Renuka swamy Murder : ರೇಣುಕಾಸ್ವಾಮಿ ಕುಟುಂಬಸ್ಥರಿಗೆ ಸಾಂತ್ವನ ಹೇಳಿದ ಬಾಳೆಹೊನ್ನೂರು ಶ್ರೀಗಳು

Vijayanagara News
ವಿಜಯನಗರ17 hours ago

Vijayanagara News : ಕೆಲಸಕ್ಕೆ ಚಕ್ಕರ್, ಸಂಬಳಕ್ಕೆ ಹಾಜರ್! ಹಾರಕನಾಳು ಗ್ರಾಪಂ ಪಿಡಿಓಗಾಗಿ ಗ್ರಾಮಸ್ಥರ ಹುಡುಕಾಟ

Actor Darshan
ಯಾದಗಿರಿ2 days ago

Actor Darshan : ಬಾಸ್‌ ಅಂತ ಯಾಕ್‌ ಬಕೆಟ್‌ ಹಿಡಿಯುತ್ತೀರಾ ಅಂದವನಿಗೆ ದರ್ಶನ್ ಅಭಿಮಾನಿಯಿಂದ ಜೀವ ಬೆದರಿಕೆ!

Karnataka Weather Forecast
ಮಳೆ2 days ago

Karnataka Weather : ಕರಾವಳಿ, ಉತ್ತರ ಒಳನಾಡಿನಲ್ಲಿ ವರುಣಾರ್ಭಟ; ನಾಳೆಯು ಹಲವೆಡೆ ಸಿಕ್ಕಾಪಟ್ಟೆ ಮಳೆ

Actor Darshan
ಬೆಂಗಳೂರು3 days ago

Actor Darshan : ರೇಣುಕಾಸ್ವಾಮಿಯನ್ನು ಕಿಡ್ನ್ಯಾಪ್ ಮಾಡಿ ಕರೆತರುವ ದೃಶ್ಯ ಸಿಸಿ ಕ್ಯಾಮೆರಾದಲ್ಲಿ ಸೆರೆ!

actor Darshan
ಬೆಂಗಳೂರು3 days ago

Actor Darshan : ರೇಣುಕಾಸ್ವಾಮಿ ಕೊಲೆ ಕೇಸ್‌ನಲ್ಲಿ ಮತ್ತಿಬ್ಬರು ಸರೆಂಡರ್‌; ಆರೋಪಿಗಳ ಸಂಖ್ಯೆ 16ಕ್ಕೆ ಏರಿಕೆ

Actor Darshan
ಸಿನಿಮಾ3 days ago

Actor Darshan : ರೇಣುಕಾಸ್ವಾಮಿ ‌ಮೃತದೇಹ ಬಿಸಾಡಿ ಬಳಿಕ ಸಾಕ್ಷ್ಯಇದ್ದ 2 ಮೊಬೈಲ್‌ಗಳನ್ನು ಮೋರಿಗೆ ಎಸೆದ್ರಾ ಆರೋಪಿಗಳು?

karnataka weather Forecast
ಮಳೆ5 days ago

Karnataka Weather : ಭಾರಿ ಮಳೆಗೆ ಗುಡ್ಡದಿಂದ ಉರುಳಿ ಬಿದ್ದ ಬಂಡೆಗಲ್ಲು; ಬೆಂಗಳೂರಲ್ಲೂ ಸಂಜೆ ವರ್ಷಧಾರೆ

actor Darshan
ಚಿತ್ರದುರ್ಗ6 days ago

Actor Darshan: ರೇಣುಕಾ ಸ್ವಾಮಿ ಕೊಲೆ ಕೇಸ್‌ನಲ್ಲಿ ದರ್ಶನ್‌ ಅರೆಸ್ಟ್‌; ಪ್ರಕರಣವನ್ನು ಸಿಬಿಐಗೆ ವಹಿಸಲು ಒತ್ತಾಯ

ಟ್ರೆಂಡಿಂಗ್‌