Udupi Toilet Case : ಉಡುಪಿ ಟಾಯ್ಲೆಟ್‌ ವಿಡಿಯೊ ಪ್ರಕರಣಕ್ಕೆ ಭಯೋತ್ಪಾದನೆ, ಲವ್‌ ಜಿಹಾದ್‌ ಟ್ವಿಸ್ಟ್‌ - Vistara News

ಉಡುಪಿ

Udupi Toilet Case : ಉಡುಪಿ ಟಾಯ್ಲೆಟ್‌ ವಿಡಿಯೊ ಪ್ರಕರಣಕ್ಕೆ ಭಯೋತ್ಪಾದನೆ, ಲವ್‌ ಜಿಹಾದ್‌ ಟ್ವಿಸ್ಟ್‌

Udupi Toilet Case : ಉಡುಪಿಯ ವಿಡಿಯೊ ಚಿತ್ರೀಕರಣ ಪ್ರಕರಣದ ಹಿಂದೆ ಭಯೋತ್ಪಾದಕರು ಮತ್ತು ಲವ್‌ ಜಿಹಾದ್‌ ಕೈವಾಡ ಇರಬಹುದು ಎಂಬ ಸಂಶಯವನ್ನು ಬಿಜೆಪಿಯ ಇಬ್ಬರು ನಾಯಕರು ವ್ಯಕ್ತಪಡಿಸಿದ್ದಾರೆ.

VISTARANEWS.COM


on

kota Srinivas poojary and sunil kumar
ಮಹತ್ವದ, ಕುತೂಹಲಕರ ಸುದ್ದಿಗಾಗಿ ಫಾಲೊ ಮಾಡಿ
Koo

ಬೆಂಗಳೂರು: ಉಡುಪಿಯ ನೇತ್ರಜ್ಯೋತಿ ಪ್ಯಾರಾ ಮೆಡಿಕಲ್‌ ಕಾಲೇಜಿನಲ್ಲಿ (Udupi Nethrajyothi College) ನಡೆದ ವಿಡಿಯೋ ಚಿತ್ರೀಕರಣಕ್ಕೆ (Udupi Toilet Case) ಈಗ ಭಯೋತ್ಪಾದನೆ (Terrorism) ಮತ್ತು ಲವ್‌ ಜಿಹಾದ್‌ (Love Jihad) ಟ್ವಿಸ್ಟ್‌ ಸಿಕ್ಕಿದೆ. ಈ ಕೃತ್ಯದ ಹಿಂದೆ ಭಯೋತ್ಪಾದಕರ ಸಂಚು ಇರಬಹುದು ಮತ್ತು ಇದೊಂದು ಲವ್‌ ಜಿಹಾದ್‌ ಕೈವಾಡವಿರಬಹುದು ಎಂದು ಬಿಜೆಪಿ ಹೇಳಿದ್ದು, ಇದರ ಬಗ್ಗೆ ಎನ್‌ಐಎ ತನಿಖೆಗೆ ಆಗ್ರಹಿಸಿದೆ. ಮಾಜಿ ಸಚಿವರಾದ ಕೋಟ ಶ್ರೀನಿವಾಸ ಪೂಜಾರಿ (Kota Srinivasa Poojari) ಮತ್ತು ಸುನಿಲ್‌ ಕುಮಾರ್‌ (Sunil Kumar) ಅವರು ಈ ಗಂಭೀರ ಆರೋಪ ಮಾಡಿದ್ದಾರೆ.

ಉಡುಪಿ ವಿಡಿಯೊ ಪ್ರಕರಣದ ಬಗ್ಗೆ ಬೆಂಗಳೂರಿನ ಬಿಜೆಪಿ ಕಚೇರಿಯಲ್ಲಿ ಮಾತನಾಡಿದ ಮಾಜಿ ಸಚಿವ ಕೋಟ ಶ್ರೀನಿವಾಸ್‌ ಪೂಜಾರಿ ಅವರು, ಇಡೀ ದೇಶದ ನಾಗರಿಕರು ತಲೆ ತಗ್ಗಿಸುವಂತಹ ಪ್ರಕರಣ‌ ಇದು. ಕಳೆದ ಆರೇಳು ತಿಂಗಳುಗಳಿಂದ ಈ ರೀತಿ ವಿಡಿಯೊ ಮಾಡಲಾಗುತ್ತಿದೆ ಎಂದು ವಿದ್ಯಾರ್ಥಿನಿಯರೇ ಬಹಿರಂಗವಾಗಿ ಹೇಳುತ್ತಿದ್ದಾರೆ. ಆದರೆ, ಜಿಲ್ಲಾಡಳಿತ ಹಾಗೂ ಪೊಲೀಸ್ ಇಲಾಖೆಯ ಕೈಯನ್ನು ಸರ್ಕಾರ ಕಟ್ಟಿ ಹಾಕಿದೆ. ತನಿಖೆಯಾಗದಂತೆ ನೋಡಿಕೊಳ್ಳಲಾಗುತ್ತಿದೆ ಎಂದು ಅವರು ಆರೋಪಿಸಿದರು.

ʻʻಇಂಥ ಘಟನೆ ನಡೆದಾಗ, ಆರೋಪಗಳು ಕೇಳಿಬಂದಾಗ ಸಮಗ್ರ ತನಿಖೆ ನಡೆಸಬೇಕು. ಪ್ರಕರಣವನ್ನು ಸಿಐಡಿಗೆ ಒಪ್ಪಿಸಬೇಕು. ಆದರೆ, ಇಲ್ಲಿ ಮುಚ್ಚಿ ಹಾಕುವ ಕೆಲಸವನ್ನು ಮಾಡಲಾಗುತ್ತಿದೆ. ಇದು ಲವ್‌ ಜಿಹಾದ್‌ ಪ್ರಕರಣ ಇರಬಹುದು, ಇದರ ಹಿಂದೆ ಭಯೋತ್ಪಾದಕರ ಕೈವಾಡ ಇರಬಹುದುʼʼ ಎಂದು ಹೇಳಿದ ಅವರು, ಈ ಪ್ರಕರಣವನ್ನು ರಾಷ್ಟೀಯ ತನಿಖಾ ದಳಕ್ಕೆ ಒಪ್ಪಿಸುವಂತೆ ನಾನು ಗೃಹ ಸಚಿವರಾದ ಜಿ. ಪರಮೇಶ್ವರ್ ಹಾಗೂ ಸಿಎಂ ಸಿದ್ದರಾಮಯ್ಯ ಅವರನ್ನು ಆಗ್ರಹಿಸುತ್ತೇನೆ ಎಂದರು.

ಮುಚ್ಚಿ ಹಾಕುವ ಹುನ್ನಾರ ಎಂದ ಸುನಿಲ್‌ ಕುಮಾರ್

‌ಉಡುಪಿಯ ಇಡೀ ಘಟನೆಯನ್ನು ಪೊಲೀಸ್‌ ಇಲಾಖೆ ಹಾಗೂ ಸರ್ಕಾರ ಮುಚ್ಚಿ ಹಾಕುವ ಹುನ್ನಾರ ನಡೆಸುತ್ತಿವೆ. ಘಟನೆ ನಡೆದು ಎಂಟು ದಿನಗಳ ಕಾಲ ಎಫ್ಐಆರ್ ದಾಖಲು ಮಾಡಿಲ್ಲ ಅಂದರೆ ಸಹಜವಾಗಿ ದೊಡ್ಡ ಅನುಮಾನವೇ ಹುಟ್ಟಿಕೊಳ್ಳುತ್ತದೆ ಎಂದು ಮಾಜಿ ಸಚಿವ, ಕಾರ್ಕಳ ಶಾಸಕ ಸುನಿಲ್‌ ಕುಮಾರ್‌ ಬೆಂಗಳೂರಿನಲ್ಲಿ ಹೇಳಿದರು.

ʻಮುಸಲ್ಮಾನ ಹೆಣ್ಣು ಮಕ್ಕಳು ಅಂತಾ ಸರ್ಕಾರ ಕೇಸ್ ಮುಚ್ಚಿ ಹಾಕುವ ಕೆಲಸ ಮಾಡ್ತಿದೆಯಾ..? ಎಂಬ ಪ್ರಶ್ನೆ ಉಡುಪಿ ಭಾಗ ಹಾಗೂ ರಾಜ್ಯದ ಜನರಲ್ಲಿ ಪ್ರಶ್ನೆ ಮೂಡುತ್ತಿದೆ. ಹಿಜಾಬ್ ಘಟನೆ ಆದಾಗ ಸರ್ಕಾರಿ ಶಾಲೆಯಲ್ಲಿ ಓದುವ ಮಕ್ಕಳು ಸುಪ್ರೀಂ ಕೋರ್ಟ್‌ಗೆ ಹೋಗುತ್ತಾರೆ ಎಂದರೆ ಇದರ ಹಿಂದೆ ಎಷ್ಟು ದೊಡ್ಡ ಶಕ್ತಿ ಗಳು ಕೆಲಸ ಮಾಡಿದ್ದವು ಎಂಬುದು ಎಲ್ಲರಿಗೂ ಅರ್ಥವಾಗುತ್ತದೆ. ಹಾಗೇಯೆ ವಿಡಿಯೋ ಪ್ರಕರಣದ ಹಿಂದೆ ಕೂಡಾ ದೊಡ್ಡ ಶಕ್ತಿಗಳು ಕೆಲಸ ಮಾಡುತ್ತಿವೆʼʼ ಎಂದು ಸುನಿಲ್‌ ಕುಮಾರ್‌ ಹೇಳಿದರು.

ಪದೇಪದೆ ಮೊಬೈಲ್‌ ಬದಲಾಯಿಸುತ್ತಿದ್ದರಾ ವಿದ್ಯಾರ್ಥಿನಿಯರು?

ನೇತ್ರಜ್ಯೋತಿ ಪ್ಯಾರಾಮೆಡಿಕಲ್‌ ಕಾಲೇಜಿನಲ್ಲಿ ಹಿಂದು ವಿದ್ಯಾರ್ಥಿನಿಯ ಟಾಯ್ಲೆಟ್‌ ಬಳಕೆಯನ್ನು ಚಿತ್ರೀಕರಿಸಿಕೊಂಡ ಆರೋಪ ಎದುರಿಸುತ್ತಿರುವ ಮೂವರು ಮುಸ್ಲಿಂ ವಿದ್ಯಾರ್ಥಿನಿಯರು ಆಗಾದ ಮೊಬೈಲ್‌ ಬದಲಾಯಿಸುತ್ತಿದ್ದರು ಎಂದು ಅಲ್ಲಿನ ಕಾಲೇಜು ವಿದ್ಯಾರ್ಥಿಗಳೇ ಆರೋಪ ಮಾಡಿದ್ದಾರೆ. ಹೀಗಾಗಿ ಆ ಮೂವರು ವಿದ್ಯಾರ್ಥಿನಿಯರ ಪೋಷಕರ ವಿಚಾರಣೆ ಮಾಡಬೇಕು ಎಂದು ಸುನಿಲ್‌ ಕುಮಾರ್‌ ಆಗ್ರಹಿಸಿದರು.

ʻಬಿಜೆಪಿ ಈ ಘಟನೆಯನ್ನು ಅತ್ಯಂತ ಗಂಭೀರವಾಗಿ ತೆಗೆದುಕೊಂಡಿದೆ ಎಂದು ಹೇಳಿದ ಸುನಿಲ್‌ ಕುಮಾರ್‌ ಅವರು, ಯಾವುದೇ ಒತ್ತಡಕ್ಕೆ ಮಣಿಯದೆ, ಹಿಂಜರಿಯದೆ ಎಲ್ಲ ಆಯಾಮದಲ್ಲೂ ತನಿಖೆ ಮಾಡಬೇಕುʼʼ ಎಂದು ಒತ್ತಾಯಿಸಿದರು.

ಸರ್ಕಾರದ ನಡವಳಿಕೆ ಅಚ್ಚರಿ ಎಂದ ಸುನಿಲ್‌ ಕುಮಾರ್‌

ʻʻಬಹಳ ಆಶ್ಚರ್ಯ ಮತ್ತು ದುರ್ದೈವದ ಸಂಗತಿ ಅಂದರೆ ಸಿದ್ದರಾಮಯ್ಯ ಸರ್ಕಾರಕ್ಕೆ ಡಿಜೆ ಹಳ್ಳಿ, ಕೆಜೆ ಹಳ್ಳಿಯಲ್ಲಿ ಬೆಂಕಿ ಹಾಕಿದವರು ಅಮಾಯಕರಂತೆ ಕಾಣುತ್ತಾರೆ. ಅದೇ ಹೊತ್ತಿಗೆ ಬಜರಂಗ ದಳದ ಕಾರ್ಯಕರ್ತರನ್ನು ಗಡಿಪಾರು ಮಾಡುತ್ತದೆ. ಉಡುಪಿಯ ಪ್ರಕರಣ ತನಿಖೆ ಆಗಬೇಕು ಎಂದು ಆಗ್ರಹಿಸಿದ ರಶ್ಮಿ ಸಾಮಂತ್‌ ಅವರ ಮನೆಗೆ ಪೊಲೀಸರು ರಾತ್ರೋ ರಾತ್ರಿ ಹೋಗ್ತಾರೆʼʼ ಎಂದು ಹೇಳಿದ ಸುನಿಲ್‌ ಕುಮಾರ್‌. ವೀರಾವೇಶದ ಭಾಷಣ ಮಾಡುವ ಸಿದ್ದರಾಮಯ್ಯವರಿಗೆ ವಿದ್ಯಾರ್ಥಿನಿ ಮನೆಗೆ ಹೋಗೋ ತಾಕತ್ತಿಲ್ವ?ʼʼ ಎಂದು ಪ್ರಶ್ನಿಸಿದರು.

ʻʻಪೊಲೀಸರು ಯಾರದ್ದೋ ಒತ್ತಡಕ್ಕೆ ಮಣಿದು, ಸುಮ್ಮನೆ ಆದರೆ, ಮುಂದಿನ ದಿನಗಳಲ್ಲಿ ನಮ್ಮ ಎರಡು ಜಿಲ್ಲೆಗಳು ಅಪಾಯಕ್ಕೆ ಸಿಲುಕಬಹುದುʼʼ ಎಂದು ಸುನಿಲ್‌ ಕುಮಾರ್‌ ಎಚ್ಚರಿಸಿದರು.

ಇದನ್ನೂ ಓದಿ: Udupi Toilet Case : ಹಿಂದು ವಿದ್ಯಾರ್ಥಿನಿಯರಿಗೆ ಖುಷ್ಬೂ ಅನ್ಯಾಯ ಮಾಡಿದ್ದಾರೆ ಎಂದ ಮುತಾಲಿಕ್​

ಬೆಂಗಳೂರು: ಉಡುಪಿಯ ನೇತ್ರಜ್ಯೋತಿ ಪ್ಯಾರಾ ಮೆಡಿಕಲ್‌ ಕಾಲೇಜಿನಲ್ಲಿ (Udupi Nethrajyothi College) ನಡೆದ ವಿಡಿಯೋ ಚಿತ್ರೀಕರಣಕ್ಕೆ (Udupi Toilet Case) ಈಗ ಭಯೋತ್ಪಾದನೆ (Terrorism) ಮತ್ತು ಲವ್‌ ಜಿಹಾದ್‌ (Love Jihad) ಟ್ವಿಸ್ಟ್‌ ಸಿಕ್ಕಿದೆ. ಈ ಕೃತ್ಯದ ಹಿಂದೆ ಭಯೋತ್ಪಾದಕರ ಸಂಚು ಇರಬಹುದು ಮತ್ತು ಇದೊಂದು ಲವ್‌ ಜಿಹಾದ್‌ ಕೈವಾಡವಿರಬಹುದು ಎಂದು ಬಿಜೆಪಿ ಹೇಳಿದ್ದು, ಇದರ ಬಗ್ಗೆ ಎನ್‌ಐಎ ತನಿಖೆಗೆ ಆಗ್ರಹಿಸಿದೆ. ಮಾಜಿ ಸಚಿವರಾದ ಕೋಟ ಶ್ರೀನಿವಾಸ ಪೂಜಾರಿ (Kota Srinivasa Poojari) ಮತ್ತು ಸುನಿಲ್‌ ಕುಮಾರ್‌ (Sunil Kumar) ಅವರು ಈ ಗಂಭೀರ ಆರೋಪ ಮಾಡಿದ್ದಾರೆ.

ಕ್ಷಣ ಕ್ಷಣದ ಮಾಹಿತಿಗಾಗಿ Vistara News FaceBook ಪೇಜ್ ಫಾಲೋ ಮಾಡಿ
ಮಹತ್ವದ ಮಾಹಿತಿಗಾಗಿ ವಿಸ್ತಾರ ನ್ಯೂಸ್ ಆ್ಯಪ್ ಉಚಿತವಾಗಿ ಡೌನ್ ಲೋಡ್ ಮಾಡಿಕೊಳ್ಳಿ: Andriod App | IOS App
Continue Reading
Click to comment

Leave a Reply

Your email address will not be published. Required fields are marked *

ಮಳೆ

Karnataka Weather : ಭಾರಿ ಮಳೆಗೆ ಗುಡ್ಡದಿಂದ ಉರುಳಿ ಬಿದ್ದ ಬಂಡೆಗಲ್ಲು; ಬೆಂಗಳೂರಲ್ಲೂ ಸಂಜೆ ವರ್ಷಧಾರೆ

Rain News : ರಾಜ್ಯದ ಹಲವೆಡೆ ಭಾರಿ ಮಳೆಯಾಗುತ್ತಿದ್ದು (Karnataka Weather Forecast), ಕಾರವಾರದ ಟನಲ್‌ ಎದುರು ಗುಡ್ಡ ಕುಸಿತ ಭೀತಿ ಹೆಚ್ಚಾಗುತ್ತಿದೆ. ಬಂಡೆಗಲ್ಲುಗಳು ರಸ್ತೆಗೆ ಉರುಳಿ ಬೀಳುತ್ತಿದ್ದು, ಸವಾರರು ಪ್ರಾಣ ಭಯದಲ್ಲೇ ಓಡಾಡುವಂತಾಗಿದೆ.

VISTARANEWS.COM


on

By

karnataka weather Forecast
Koo

ಕಾರವಾರ/ ಕಲಬುರಗಿ: ಕರಾವಳಿಯಲ್ಲಿ ವ್ಯಾಪಕ (Rain News) ಮಳೆಯಾಗುತ್ತಿದ್ದು, ಅವಾಂತರಗಳು ಮುಂದುವರಿದಿದೆ. ಉತ್ತರ ಕನ್ನಡದ ಕಾರವಾರ ರಾಷ್ಟ್ರೀಯ ಹೆದ್ದಾರಿ 66ರ ಬಿಣಗಾ ಸುರಂಗದಲ್ಲಿ ಮತ್ತೆ ಗುಡ್ಡ ಕುಸಿತ ಭೀತಿ ಎದುರಾಗಿದೆ. ಟನಲ್ ಎದುರು ಗುಡ್ಡದಿಂದ ಬಂಡೆಗಲ್ಲುಗಳು ರಸ್ತೆಗೆ ಉರುಳಿ ಬೀಳುತ್ತಿವೆ. ಭಾರೀ ಮಳೆಗೆ (Karnataka weather Forecast) ಟನಲ್ ಮೇಲ್ಭಾಗದ ಮಣ್ಣು ಸಡಿಲಗೊಂಡಿದ್ದು, ಬಂಡೆಗಲ್ಲು ಬೀಳುತ್ತಿವೆ.

ಐಆರ್‌ಬಿ ಅವೈಜ್ಞಾನಿಕ ಕಾಮಗಾರಿಯಿಂದಾಗಿ ಹೆದ್ದಾರಿಯಲ್ಲೂ ಗುಡ್ಡ ಕುಸಿತ ಭೀತಿ ಎದುರಾಗಿದೆ. ವಾಹನ ಸವಾರರು ಆತಂಕದಲ್ಲೇ ಹೆದ್ದಾರಿಯಲ್ಲಿ ಸಾಗುವಂತಾಗಿದೆ. ಕಳೆದ 10 ವರ್ಷಗಳಿಂದ ಕಾರವಾರದಿಂದ ಭಟ್ಕಳವರೆಗೂ ಹೆದ್ದಾರಿ ಅಗಲೀಕರಣ ಕಾಮಗಾರಿ ನಡೆಯುತ್ತಿದ್ದು, ಪೂರ್ಣಗೊಂಡಿಲ್ಲ. ಹೆದ್ದಾರಿ ಅಗಲೀಕರಣ ನಡೆಸುತ್ತಿರುವ ಐಆರ್‌ಬಿ ಕಂಪೆನಿ ವಿರುದ್ಧ ಸಾರ್ವಜನಿಕರು ಆಕ್ರೋಶ ಹೊರಹಾಕಿದ್ದಾರೆ.

ಬೆಂಗಳೂರು, ಕಲಬುರಗಿಯಲ್ಲಿ ಭಾರಿ ಮಳೆ

ರಾಜಧಾನಿ ಬೆಂಗಳೂರಲ್ಲಿ ಮಂಗಳವಾರ ಸಂಜೆ ವೇಳೆಗೆ ಮಳೆಯಾಗಿದೆ. ಅನ್ನಪೂರ್ಣೇಶ್ವರಿ ನಗರ, ಲಗ್ಗೆರೆ, ಸುಂಕದಕಟ್ಟೆ, ವಿಧಾನಸೌಧ, ಮೆಜೆಸ್ಟಿಕ್‌, ಶಿವಾಜಿನಗರ ಸೇರಿದಂತೆ ಹಲವೆಡೆ ಮಳೆಯಾಗಿದೆ. ಇತ್ತ ಕಲಬುರಗಿ ಜಿಲ್ಲೆಯ ಜೇವರ್ಗಿ ತಾಲೂಕಿನಾದ್ಯಂತ ಭಾರಿ ಮಳೆಯಾಗುತ್ತಿದ್ದು, ಹಳ್ಳ-ಕೊಳ್ಳಗಳು ತುಂಬಿ ಹರಿಯುತ್ತಿದೆ. ಯಡ್ರಾಮಿ ತಾಲೂಕಿನ ವರವಿ-ಕುಕನೂರು ಮಾರ್ಗದಲ್ಲಿ ಹಳ್ಳ ದಾಟಲು ಗ್ರಾಮಸ್ಥರು ಹರಸಾಹಸ ಪಡುವಂತಾಗಿದೆ.

ಜಮೀನಿನಲ್ಲಿ ಬಿತ್ತನೆ ‌ಕಾರ್ಯ ಮುಗಿಸಿ ‌ಮನೆಗೆ ತೆರಳುವಾಗ ರೈತರು ಹಗ್ಗ ಹಿಡಿದು ಹಳ್ಳದಾಟುತ್ತಿದ್ದಾರೆ. ಪ್ರತಿಬಾರಿ ಮಳೆಗಾಲದಲ್ಲೂ ಇದೇ ರೀತಿ ಸಮಸ್ಯೆ ಎದುರಾಗಿದೆ ಎಂದು ಅಸಮಾಧಾನ ಹೊರಹಾಕಿದ್ದಾರೆ. ಕೊಪ್ಪಳದಲ್ಲೂ ಮಳೆ ಸುರಿದಿದೆ. ಕೊಪ್ಪಳ ನಗರ ಸೇರಿದಂತೆ ಸುತ್ತಮುತ್ತ ಬೆಳಿಗ್ಗೆಯಿಂದಲೂ ಮೋಡ ಕವಿದ ವಾತಾವರಣವಿತ್ತು. ಮಧ್ಯಾಹ್ನ ಆಗುತ್ತಿದ್ದಂತೆ ಮಳೆಯ ಸಿಂಚನವಾಗಿದೆ. ನಿತ್ಯವೂ ಆಗಾಗ ಮಳೆ ಬೀಳುತ್ತಿದ್ದು, ಕೃಷಿ ಚಟುವಟಿಕೆಗಳಿಗೆ ಕೊಂಚ ಹಿನ್ನಡೆಯಾಗಿದೆ.

ಇದನ್ನೂ ಓದಿ: Actor Darshan: ರೇಣುಕಾ ಸ್ವಾಮಿ ಕೊಲೆ ಕೇಸ್‌ನಲ್ಲಿ ದರ್ಶನ್‌ ಅರೆಸ್ಟ್‌; ಪ್ರಕರಣವನ್ನು ಸಿಬಿಐಗೆ ವಹಿಸಲು ಒತ್ತಾಯ

ನಾಳೆ, ನಾಡಿದ್ದು ಅಲ್ಪ ಮಳೆ

ರಾಜ್ಯದ ಹಲವೆಡೆ ಮಳೆ ಅಬ್ಬರ ತಗ್ಗಿದೆ. ಇನ್ನೊಂದು ವಾರ ಪ್ರತ್ಯೇಕ ಕಡೆಗಳಲ್ಲಿ ಮಳೆಯಾಗುವ ಸಾಧ್ಯತೆ ಇದೆ. ಜೂ.12ರಂದು‌ ಕರಾವಳಿಯ ದಕ್ಷಿಣ ಕನ್ನಡ, ಉಡುಪಿಯಲ್ಲಿ ಗುಡುಗು ಸಹಿತ ಭಾರಿ ಮಳೆಯಾಗುವ ಸಾಧ್ಯತೆ ಇದೆ. ಉತ್ತರ ಕನ್ನಡದ ಹೆಚ್ಚಿನ ಸ್ಥಳಗಳಲ್ಲಿ ಹಗುರದಿಂದ ಸಾಧಾರಣ ಮಳೆಯಾಗುವ ನಿರೀಕ್ಷೆ ಇದೆ. ಉತ್ತರ ಒಳನಾಡಿನ ಬೀದರ್‌, ವಿಜಯಪುರ, ಯಾದಗಿರಿ, ಕಲಬುರಗಿ ಹಾಗೂ ಮಲೆನಾಡಿನ ಚಿಕ್ಕಮಗಳೂರು ಭಾಗದಲ್ಲಿ ಗುಡುಗು ಸಹಿತ ಮಳೆ ಜತೆಗೆ ಗಾಳಿಯು ಗಂಟೆಗೆ 30-40 ಕಿ.ಮೀ ವ್ಯಾಪ್ತಿಯಲ್ಲಿ ಬೀಸಲಿದೆ.

ಜೂನ್‌ 13ರಂದು ಉತ್ತರ ಕನ್ನಡದಲ್ಲಿ ಭಾರಿ ಮಳೆಯಾಗಲಿದೆ. ಕರಾವಳಿ, ಉತ್ತರ ಒಳನಾಡು, ದಕ್ಷಿಣ ಒಳನಾಡಿನ ಹಲವೆಡೆ ಹಗುರದಿಂದ ಸಾಧಾರಣ ಮಳೆಯಾಗುವ ಸಾಧ್ಯತೆ ಇದೆ. ಇನ್ನೂ ಬೆಂಗಳೂರು ಸುತ್ತಮುತ್ತ ಆಗಾಗ ಸಾಮಾನ್ಯವಾಗಿ ಮೋಡ ಕವಿದ ವಾತಾವರಣ ಇರಲಿದೆ. ಮಧ್ಯಾಹ್ನ ಅಥವಾ ಸಂಜೆ ವೇಳೆಗೆ ಗುಡುಗು ಸಹಿತ ಮಳೆಯಾಗಬಹುದು ಅಂದಾಜಿಸಲಾಗಿದೆ. ಗರಿಷ್ಠ ಹಾಗೂ ಕನಿಷ್ಠ ಉಷ್ಣಾಂಶವು ಕ್ರಮವಾಗಿ 29, 21 ಡಿ.ಸೆ ಇರಲಿದೆ.

ಈ ಸಂಗತಿಯ ಕುರಿತು ನಿಮ್ಮ ಅನಿಸಿಕೆ ಏನು? ಕಾಮೆಂಟ್ ಮೂಲಕ ತಿಳಿಸಿ

Continue Reading

ಮಳೆ

Karnataka Weather : ಬೆಂಗಳೂರಲ್ಲಿ ಭಾರಿ ಮಳೆ ಎಚ್ಚರಿಕೆ; ಮುಕ್ಕಾಲು ಕರ್ನಾಟಕಕ್ಕೆ ರೆಡ್‌ ಅಲರ್ಟ್‌

Karnataka Weather Forecast : ರಾಜ್ಯಾದ್ಯಂತ ಗುಡುಗು ಸಹಿತ ಭಾರಿ (Rain News) ಮಳೆಯಾಗಲಿದ್ದು, ಹಲವು ಜಿಲ್ಲೆಗಳಿಗೆ ರೆಡ್‌, ಯೆಲ್ಲೋ, ಆರೆಂಜ್‌ ಅಲರ್ಟ್‌ಗಳನ್ನು ನೀಡಲಾಗಿದೆ. ಜೂನ್‌ 13ರವರೆಗೆ ಮೀನುಗಾರರು ಸಮುದ್ರಕ್ಕೆ ಇಳಿಯದಂತೆ ಸೂಚಿಸಲಾಗಿದೆ.

VISTARANEWS.COM


on

By

Karnataka Weather Forecast
Koo

ಬೆಂಗಳೂರು: ಉತ್ತರ ಒಳನಾಡು, ಕರಾವಳಿ ಹಾಗೂ ಮಲೆನಾಡಿನಲ್ಲಿ ಚದುರಿದಂತೆ ವ್ಯಾಪಕವಾಗಿ ಹಗುರದಿಂದ ಮಧ್ಯಮ ಮಳೆಯಾಗುವ (Rain News) ಸಾಧ್ಯತೆಯಿದೆ. ದಕ್ಷಿಣ ಒಳನಾಡಿನ ಚದುರಿದಂತೆ ಹಗುರದಿಂದ ಮಳೆಯಾಗುವ ಸಾಧ್ಯತೆಯಿದೆ. ರಾಜ್ಯದ ವಿವಿಧೆಡೆ ಗುಡುಗು ಸಹಿತ 30-40 ಕಿ.ಮೀ ವೇಗದಲ್ಲಿ ಗಾಳಿ ಬೀಸುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ (Karnataka Weather Forecast) ತಿಳಿಸಿದೆ.

ದಕ್ಷಿಣ ಒಳನಾಡಿನಲ್ಲಿ ಚದುರಿದಂತೆ ಹಗುರದಿಂದ ಮಳೆಯಾಗುವ ಸಾಧ್ಯತೆಯಿದೆ. ಉತ್ತರ ಒಳನಾಡಿನ ಬೀದರ್, ಕಲಬುರಗಿ, ವಿಜಯಪುರ, ಬೆಳಗಾವಿ, ಧಾರವಾಡ, ಗದಗ ಮತ್ತು ಕೊಪ್ಪಳ ಜಿಲ್ಲೆಗಳಲ್ಲಿ ಭಾರಿ ಮಳೆಯಾಗುವ ಸಾಧ್ಯತೆಯಿದೆ. ಯಾದಗಿರಿ, ರಾಯಚೂರು, ಬಳ್ಳಾರಿ, ವಿಜಯನಗರ ಮತ್ತು ಬಾಗಲಕೋಟೆ, ಹಾವೇರಿ, ವಿಜಯನಗರ ಜಿಲ್ಲೆಗಳಲ್ಲಿ ಚದುರಿದಂತೆ ಹಗುರದಿಂದ ಸಾಧಾರಣ ಮಳೆಯಾಗುವ ನಿರೀಕ್ಷೆ ಇದೆ.

ಕರಾವಳಿಯ ಬಹುತೇಕ ಕಡೆಗಳಲ್ಲಿ ಚದುರಿದಂತೆ ವ್ಯಾಪಕವಾಗಿ ಹಗುರದಿಂದ ಮಧ್ಯಮ ಮಳೆಯಾಗುವ ಸಾಧ್ಯತೆಯಿದೆ. ಮಲೆನಾಡಿನ ಶಿವಮೊಗ್ಗ ಜಿಲ್ಲೆಯಾದ್ಯಂತ ಭಾರೀ ಮಳೆಯಾಗುವ ಸಾಧ್ಯತೆ ಇದೆ. ರಾಜಧಾನಿ ಬೆಂಗಳೂರಿನಲ್ಲಿ ವ್ಯಾಪಕವಾಗಿ ಮಧ್ಯಮದಿಂದ ಭಾರಿ ಮಳೆಯಾಗುವ ಸಾಧ್ಯತೆಯಿದೆ. ಗರಿಷ್ಠ ಉಷ್ಣಾಂಶ 30 ಡಿಗ್ರಿ ಸೆಲ್ಸಿಯಸ್ ಇರಲಿದ್ದು, ಕನಿಷ್ಠ ಉಷ್ಣಾಂಶ 21 ಡಿಗ್ರಿ ಸೆಲ್ಸಿಯಸ್ ಇರಲಿದೆ.

ಇದನ್ನೂ ಓದಿ: Karnataka Weather : ಭಾರಿ ಮಳೆಗೆ ಮನೆ ಗೋಡೆ ಕುಸಿದು ಎಮ್ಮೆಗಳು ಸಾವು; ಆಕಳಿನ ಜೀವ ತೆಗೆದ ವಿದ್ಯುತ್‌ ತಂತಿ

ಈ ಜಿಲ್ಲೆಗಳಿಗೆ ರೆಡ್‌ ಅಲರ್ಟ್‌

ಗುಡುಗು ಸಹಿತ ಭಾರೀ ಮಳೆಯಾಗಲಿದ್ದು, ಗಾಳಿ ವೇಗವು 55-65 ಕಿ.ಮೀ ಇರಲಿದೆ. ಹೀಗಾಗಿ ಬಾಗಲಕೋಟೆ, ಬೆಳಗಾವಿ, ಬೀದರ್, ಧಾರವಾಡ, ಗದಗ, ಹಾವೇರಿ, ಕಲಬುರಗಿ, ಕೊಪ್ಪಳ, ರಾಯಚೂರು, ವಿಜಯಪುರ ಮತ್ತು ಯಾದಗಿರಿ ಜಿಲ್ಲೆಗಳಿಗೆ ರೆಡ್‌ ಅಲರ್ಟ್‌ ನೀಡಲಾಗಿದೆ.

ಕೆಲವು ಜಿಲ್ಲೆಗಳಲ್ಲಿ ಮಳೆಯೊಂದಿಗೆ ಗಾಳಿ ವೇಗವು 40-50 ಕಿ.ಮೀ ಇರಲಿದೆ. ಹೀಗಾಗಿ ದಕ್ಷಿಣ ಕನ್ನಡ, ಉಡುಪಿ, ಉತ್ತರ ಕನ್ನಡ ಜಿಲ್ಲೆಗಳಲ್ಲಿ ಆರೆಂಜ್ ಅಲರ್ಟ್ ಘೋಷಿಸಲಾಗಿದೆ. ಬಳ್ಳಾರಿ, ಬೆಂಗಳೂರು ಗ್ರಾಮಾಂತರ, ಚಾಮರಾಜನಗರ, ಚಿಕ್ಕಬಳ್ಳಾಪುರ, ಚಿಕ್ಕಮಗಳೂರು, ಚಿತ್ರದುರ್ಗ, ದಾವಣಗೆರೆ, ಹಾಸನ, ಕೊಡಗು, ಕೋಲಾರ, ಮಂಡ್ಯ, ಮೈಸೂರು, ರಾಮನಗರ, ಶಿವಮೊಗ್ಗ ಸೇರಿದಂತೆ ತುಮಕೂರು, ವಿಜಯನಗರ ಜಿಲ್ಲೆಗಳಲ್ಲಿ ಯೆಲ್ಲೋ ಅಲರ್ಟ್ ಘೋಷಿಸಲಾಗಿದೆ. ಜೂನ್‌ 13ರವರೆಗೆ ಕರ್ನಾಟಕ ಕರಾವಳಿಯಲ್ಲಿ ಗಂಟೆಗೆ 55 ಕಿ.ಮೀ ವೇಗದಲ್ಲಿ ಗಾಳಿ ಬೀಸುವ ಸಾಧ್ಯತೆಯಿದೆ. ಹೀಗಾಗಿ ಮೀನುಗಾರರು ಸಮುದ್ರ ಪ್ರದೇಶಗಳಿಗೆ ಹೋಗದಂತೆ ಸೂಚಿಸಲಾಗಿದೆ.

ಈ ಸಂಗತಿಯ ಕುರಿತು ನಿಮ್ಮ ಅನಿಸಿಕೆ ಏನು? ಕಾಮೆಂಟ್ ಮೂಲಕ ತಿಳಿಸಿ

Continue Reading

ಮಳೆ

Karnataka Weather : ಭಾರಿ ಮಳೆಗೆ ಮನೆ ಗೋಡೆ ಕುಸಿದು ಎಮ್ಮೆಗಳು ಸಾವು; ಆಕಳಿನ ಜೀವ ತೆಗೆದ ವಿದ್ಯುತ್‌ ತಂತಿ

Karnataka Weather Forecast : ವ್ಯಾಪಕವಾಗಿ ಸುರಿಯುತ್ತಿರುವ ಮಳೆಯಿಂದಾಗಿ (Rain News) ಮರಗಳು ಧರೆಗುರುಳಿದ್ದು, ನಾನಾ ಅವಾಂತರವನ್ನೇ ಸೃಷ್ಟಿಸಿದೆ. ಭಾರಿ ಮಳೆಗೆ ಮನೆ ಗೋಡೆ ಕುಸಿದು ಎರಡು ಎಮ್ಮೆಗಳು ಮೃತಪಟ್ಟರೆ ಮತ್ತೊಂದು ಕಡೆ ನೆಲಕ್ಕೆ ಅಪ್ಪಳಿಸಿದ್ದ ವಿದ್ಯುತ್‌ ತಂತಿ ತಗುಲಿ ಆಕಳೊಂದು ಮೃತಪಟ್ಟಿದೆ.

VISTARANEWS.COM


on

By

Karnataka weather Forecast
Koo

ವಿಜಯಪುರ: ರಾಜ್ಯದ ಹಲವೆಡೆ ವ್ಯಾಪಕ ಮಳೆಯಾಗುತ್ತಿದ್ದು, (Karnataka Weather Forecast) ಅವಾಂತರವನ್ನೇ ಸೃಷ್ಟಿಸಿದೆ. ವಿಜಯಪುರದಲ್ಲಿ ಸುರಿದ ಧಾರಾಕಾರ ಮಳೆಗೆ (Rain News) ಮನೆಯ ಗೋಡೆ ಕುಸಿದು, ಎರಡು ಎಮ್ಮೆಗಳು ಮೃತಪಟ್ಟಿವೆ. ಗೋಡೆ ಕುಸಿಯುವಾಗ ಮನೆಯಲ್ಲಿ ಯಾರು ಇಲ್ಲದ ಕಾರಣಕ್ಕೆ ಭಾರಿ ಅನಾಹುತವೊಂದು ತಪ್ಪಿದೆ. ವಿಜಯಪುರ ಜಿಲ್ಲೆಯ ದೇವರ ಹಿಪ್ಪರಗಿ ಪಟ್ಟಣದಲ್ಲಿ ಘಟನೆ ನಡೆದಿದೆ.

ಬಸಪ್ಪ ಕೋಟಿನ್ ಎಂಬುವರಿಗೆ ಸೇರಿದ ಎರಡು ಎಮ್ಮೆಗಳನ್ನು ಮನೆ ಸಮೀಪವೇ ಕಟ್ಟಲಾಗಿತ್ತು. ಈ ವೇಳೆ ಗೋಡೆ ಕುಸಿದು ಬಿದ್ದ ರಭಸಕ್ಕೆ ಎಮ್ಮೆಗಳು ಮೃತಪಟ್ಟಿವೆ. ಲಕ್ಷ ರೂಪಾಯಿಗೆ ಬೆಲೆ ಬಾಳುತ್ತಿದ್ದ ಎರಡು ಎಮ್ಮೆಗಳನ್ನು ಕಳೆದುಕೊಂಡು ಬಸಪ್ಪ ಕಂಗಲಾಗಿದ್ದಾರೆ. ನೈಸರ್ಗಿಕ ವಿಕೋಪದಿಂದ ಆದ ಅನಾಹುತಕ್ಕೆ ಪರಿಹಾರ ನೀಡುವಂತೆ ಮನವಿ ಮಾಡಿದ್ದಾರೆ. ನಿನ್ನೆ ಭಾನುವಾರ ರಾತ್ರಿ‌ ಸುರಿದ ಧಾರಾಕಾರ ಮಳೆಗೆ ದೇವರ ಹಿಪ್ಪರಗಿಯ ಕೆಲ ಮನೆಗಳಲ್ಲಿ ನೀರು ನುಗ್ಗಿತ್ತು. ಇದರಿಂದಾಗಿ ಜನರು ಜಾಗರಣೆ ಮಾಡುವಂತಾಯಿತು.

ಯಾದಗಿರಿಯಲ್ಲಿ ವಿದ್ಯುತ್ ತಗುಲಿ ಜಾನುವಾರು ಸಾವು

ಇತ್ತ ಯಾದಗಿರಿಯ ಯಡ್ಡಹಳ್ಳಿ ಗ್ರಾಮದಲ್ಲಿ ವಿದ್ಯುತ್‌ ತಗುಲಿ ಜಾನುವಾರು ಮೃತಪಟ್ಟಿದೆ. ಜೆಸ್ಕಾಂ ಇಲಾಖೆ ಅಧಿಕಾರಿಗಳ ದಿವ್ಯ ನಿರ್ಲಕ್ಷ್ಯವೇ ಕಾರಣ ಎನ್ನಲಾಗಿದೆ. ಬಿರುಗಾಳಿ ಸಹಿತ ಸುರಿದ ಭಾರಿ ಮಳೆಯಿಂದಾಗಿ ಹಲವೆಡೆ ವಿದ್ಯುತ್‌ ಕಂಬಗಳು ಧರೆಗುರುಳಿದ್ದವು. ವಿದ್ಯುತ್ ಕಂಬ ಹಾಗೂ ವಿದ್ಯುತ್ ತಂತಿ ತೆರವು ಮಾಡದೆ ಜೆಸ್ಕಾಂ ಸಿಬ್ಬಂದಿ ವಿದ್ಯುತ್ ಪೂರೈಕೆ ಮಾಡಿದ್ದಾರೆ. ಸಿಬ್ಬಂದಿ ನಿರ್ಲಕ್ಷ್ಯದಿಂದಲೇ ವಿದ್ಯುತ್ ತಂತಿ ತುಳಿದು ಆಕಳು ಮೃತಪಟ್ಟಿದೆ ಎಂದು ಆರೋಪಿಸಿದ್ದಾರೆ. ಆಕಳು ಕಳೆದುಕೊಂಡ ಲಿಂಗಾರೆಡ್ಡಿ ಕಂಗಲಾಗಿದ್ದು, ಜೆಸ್ಕಾಂ ಇಲಾಖೆ ಅಧಿಕಾರಿಗಳ ನಿರ್ಲಕ್ಷ್ಯಕ್ಕೆ ಆಕ್ರೋಶ ಹೊರಹಾಕಿದ್ದಾರೆ.

ಇತ್ತ ಧಾರಕಾರ ಮಳೆಯಿಂದ ಯಾದಗಿರಿ ಜಿಲ್ಲೆಯ ಹುಣಸಗಿ ತಾಲೂಕಿನ ಬರದೇವನಾಳ ಸಮೀಪದ ಡೋಣಿ ನದಿಯ ಸೇತುವೆ ಸಂಪೂರ್ಣ ಜಲಾವೃತಗೊಂಡಿದೆ. ಡೋಣಿ ನದಿಗೆ ಅಡ್ಡಲಾಗಿ ನಿರ್ಮಿಸಿದ್ದ ಕಿರಿದಾದ ಸೇತುವೆ ಸಂಪೂರ್ಣ ಮುಳುಗಡೆಯಾಗಿದೆ. ಡೋಣಿ ನದಿ ಉಕ್ಕಿ ಹರಿಯುತ್ತಿರುವುದರಿಂದ ಹಲವು ಗ್ರಾಮಗಳ ಸಂಪರ್ಕ ಕಡಿತಗೊಂಡಿದೆ. ತರಕಿಹಾಳ, ಕರೇಕನಾಳ, ಮದಲಿಂಗನಾಳ ಹಾಗೂ ಗೆದ್ದಲಮರಿ ಸೇರಿ ಹಲವು ಗ್ರಾಮಗಳ ಸಂಪರ್ಕ ಕಡಿತವಾಗಿದೆ.

ಇದನ್ನೂ ಓದಿ: Karnataka Rain : ಬೆಳಗಾವಿಯಲ್ಲಿ ಭಾರಿ ಮಳೆಗೆ ಮರ ಬಿದ್ದು ಗಂಭೀರ ಗಾಯಗೊಂಡಿದ್ದ ಮತ್ತೊಬ್ಬ ಯುವಕ ಸಾವು

ಕಲಬುರಗಿಯಲ್ಲಿ ಕೆರೆಯಂತಾದ ರಸ್ತೆಗಳು

ಕಲಬುರಗಿ ಜಿಲ್ಲೆಯ ಸೇಡಂ ತಾಲೂಕಿನ ತೋಟ್ನಳ್ಳಿ ಗ್ರಾಮದಲ್ಲಿ ಭಾರಿ ಮಳೆಗೆ ಹಳ್ಳ-ಕೊಳ್ಳಗಳು ತುಂಬಿ ಹರಿಯುತ್ತಿದ್ದು, ರಸ್ತೆಗಳು ಜಲಾವೃತಗೊಂಡಿವೆ. ವೈದ್ಯಕೀಯ ಶಿಕ್ಷಣ ಸಚಿವ ಶರಣಪ್ರಕಾಶ ಪಾಟೀಲ ತವರು ಕ್ಷೇತ್ರದಲ್ಲಿ ಮಳೆಯು ಅವಾಂತರವನ್ನು ಸೃಷ್ಟಿಸಿದೆ. ಪ್ರತಿ ವರ್ಷ ಮಳೆಗಾಲದಲ್ಲಿ ಗ್ರಾಮಸ್ಥರು ಪರದಾಡುವಂತಾಗಿದೆ. ಶಾಶ್ವತ ಪರಿಹಾರಕ್ಕೆ ಆಗ್ರಹಿಸಿದ್ದಾರೆ.

ಕೊಡಗಿನಲ್ಲಿ ಮಳೆಗೆ ಧರೆಗುರುಳಿದ ಮರಗಳು

ಕೊಡಗು ಜಿಲ್ಲೆಯಾದ್ಯಂತ ನಿರಂತರ ಮಳೆಯಿಂದಾಗಿ ಹಲವೆಡೆ ಮರಗಳು ಧರೆಗುರುಳಿವೆ. ಮಡಿಕೇರಿ ತಾಲೂಕಿನ ಭಾಗಮಂಡಲದ ರಸ್ತೆಗೆ ಅಡ್ಡಲಾಗಿ ಮರ ಬಿದ್ದು ವಾಹನಗಳ ಸಂಚಾರಕ್ಕೆ ಅಡ್ಡಿಯಾಯಿತು. ಮತ್ತೊಂದೆಡೆ ಪಾಂಡಿ ಹಾಗೂ ಸೂರ್ತಲೆ ರಸ್ತೆಯಲ್ಲೂ ಮರ ಬಿದ್ದು ಅವಾಂತರವೇ ಸೃಷ್ಟಿಯಾಗಿದೆ. ಭಾಗಮಂಡಲ ರಸ್ತೆಯಲ್ಲಿ ಬಿದ್ದಿರುವ ಮರಗಳನ್ನು ಸ್ಥಳೀಯರೇ ತೆರವುಗೊಳಿಸಿದ್ದಾರೆ.

ವಿಜಯನಗರದಲ್ಲಿ ನೆಲಕ್ಕೆ ಅಪ್ಪಳಿಸಿದ ಆಲದ ಮರ

ವಿಜಯನಗರದ ಕೂಡ್ಲಿಗಿ ಪಟ್ಟಣದ ರಾಜೀವ್ ಗಾಂಧೀ ನಗರದಲ್ಲಿ ನಿರಂತರ ಮಳೆಯಿಂದಾಗಿ ಬೃಹತ್ ಆಲದ ಮರವೊಂದು ನೆಲಕ್ಕೆ ಅಪ್ಪಳಿಸಿದೆ. ಕೂಡ್ಲಿಗಿ – ಹೊಸಪೇಟೆ ರಸ್ತೆಗೆ ಸಂಪರ್ಕ ಕಲ್ಪಿಸುವ ರಸ್ತೆಗೆ ಮರ ಉರುಳಿ ಬಿದ್ದ ಪರಿಣಾಮ ವಾಹನಗಳ ಸಂಚಾರಕ್ಕೆ ಅಡಚಣೆ ಆಗಿತು. ಮರ ತೆರವು ಗೊಳಿಸುವಂತೆ ರಾಜೀವ್ ಗಾಂಧೀ ನಗರದ ನಿವಾಸಿಗಳು ಹಾಗೂ ರೈತರು ಆಗ್ರಹಿಸಿದರು. ಆಲದ ಮರವು ವಿದ್ಯುತ್ ತಂತಿ ಮೇಲೆಯೂ ಬಿದ್ದಿದ್ದು, ರಾಜೀವ್ ಗಾಂಧೀ ನಗರಕ್ಕೆ ವಿದ್ಯುತ್ ಸಂಪರ್ಕವೂ ಕಡಿತಗೊಂಡಿದೆ.

ಈ ಸಂಗತಿಯ ಕುರಿತು ನಿಮ್ಮ ಅನಿಸಿಕೆ ಏನು? ಕಾಮೆಂಟ್ ಮೂಲಕ ತಿಳಿಸಿ

Continue Reading

ಮಳೆ

Karnataka Weather : ಮುಂದಿನ 48 ಗಂಟೆಯಲ್ಲಿ ಗುಡುಗು ಸಹಿತ ಭಾರಿ ಮಳೆ; ರೆಡ್‌ ಅಲರ್ಟ್‌ ಘೋಷಣೆ

Karnataka Weather Forecast : ರಾಜ್ಯಾದ್ಯಂತ ಮುಂಗಾರು ಆರ್ಭಟ ಜೋರಾಗಿದೆ. ಮುಂದಿನ 48 ಗಂಟೆಯಲ್ಲಿ ಗುಡುಗು ಸಹಿತ ಭಾರಿ ಮಳೆಯಾಗುವ (Heavy Rain) ನಿರೀಕ್ಷೆ ಇದ್ದು, ರೆಡ್‌ ಅಲರ್ಟ್‌ ಘೋಷಣೆ (Red Alert) ಮಾಡಲಾಗಿದೆ.

VISTARANEWS.COM


on

By

Karnataka Weather Forecast
Koo

ಬೆಂಗಳೂರು: ರಾಜ್ಯಾದ್ಯಂತ ಜೂನ್‌ 10ರಂದು ಭಾರಿ ಮಳೆಯಾಗುವ (Heavy Rain) ಸಾಧ್ಯತೆ ಇದ್ದು, ರೆಡ್‌ ಅಲರ್ಟ್‌ ಘೋಷಣೆ (Red Alert) ಮಾಡಲಾಗಿದೆ. ಕರಾವಳಿಯಲ್ಲಿ ಸಾಧಾರಣದಿಂದ ಭಾರಿ (Rain News) ಮಳೆಯಾಗಲಿದೆ. ಮಲೆನಾಡು ಮತ್ತು ಉತ್ತರ ಒಳನಾಡಿನ ಜಿಲ್ಲೆಗಳಲ್ಲಿ ಪ್ರತ್ಯೇಕವಾಗಿ ಭಾರಿ ಮಳೆಯಾಗುವ ಸಾಧ್ಯತೆಯಿದೆ. ದಕ್ಷಿಣ ಒಳನಾಡಿನಲ್ಲಿ ವ್ಯಾಪಕವಾಗಿ ಹಗುರದಿಂದ ಕೂಡಿದ ಮಳೆಯಾಗುವ ಸಾಧ್ಯತೆಯಿದೆ. ರಾಜ್ಯದ ವಿವಿಧೆಡೆ ಗುಡುಗು ಸಹಿತ 30-40 ಕಿ.ಮೀ ವೇಗದಲ್ಲಿ ಗಾಳಿ ಬೀಸುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆಯನ್ನು (Karnataka Weather Forecast) ನೀಡಿದೆ.

ದಕ್ಷಿಣ ಒಳನಾಡಿನ ಬಹುತೇಕ ಕಡೆಗಳಲ್ಲಿ ವ್ಯಾಪಕವಾಗಿ ಹಗುರವಾದ ಮಳೆಯಾಗುವ ಸಾಧ್ಯತೆಯಿದೆ. ಉತ್ತರ ಒಳನಾಡಿನ ಬೆಳಗಾವಿ, ಬೀದರ್, ಬಾಗಲಕೋಟೆ, ವಿಜಯಪುರ, ಕಲಬುರಗಿ ಜಿಲ್ಲೆಗಳಲ್ಲಿ ಚದುರಿದಂತೆ ಸಾಧಾರಣ ಮಳೆಯಾಗುವ ಸಾಧ್ಯತೆ ಇದೆ. ಕೆಲವೊಮ್ಮೆ ಗುಡುಗು, ಮಿಂಚು ಇರಲಿದೆ.

ಮಲೆನಾಡಿನ ಹಾಸನ, ಕೊಡಗು, ಚಿಕ್ಕಮಗಳೂರು ಮತ್ತು ಶಿವಮೊಗ್ಗದಲ್ಲಿ ಪ್ರತ್ಯೇಕ ಸ್ಥಳಗಳಲ್ಲಿ ಭಾರಿ ಮಳೆಯಾಗುವ ಸಾಧ್ಯತೆಯಿದೆ. ಕರಾವಳಿಯ ದಕ್ಷಿಣ ಕನ್ನಡ ಮತ್ತು ಉಡುಪಿ, ಉತ್ತರ ಕನ್ನಡ ಜಿಲ್ಲೆಗಳಲ್ಲಿ ಭಾರೀ ಮಳೆಯಾಗುವ ಸಾಧ್ಯತೆ ಇದೆ. ರಾಜಧಾನಿ ಬೆಂಗಳೂರಿನಲ್ಲಿ ಚದುರಿದಂತೆ ಮಳೆಯಾಗುವ ನಿರೀಕ್ಷೆ ಇದೆ.

ಇದನ್ನೂ ಓದಿ: Karnataka Rain : ಚಲಿಸುತ್ತಿದ್ದ ಬೈಕ್ ಮೇಲೆ ಮರ ಬಿದ್ದು, ಹೊರ ಬಂತು ಸವಾರನ ಕರುಳು! ಮತ್ತಿಬ್ಬರು ಗಂಭೀರ

ಈ ಜಿಲ್ಲೆಗಳಲ್ಲಿ ವೇಗವಾಗಿ ಬೀಸುತ್ತೆ ಗಾಳಿ

ಗುಡುಗು ಸಹಿತ ಭಾರೀ ಮಳೆಯೊಂದಿಗೆ ಗಾಳಿ ವೇಗವು ಗಂಟೆಗೆ 55-65 ಕಿ.ಮೀ ಇರಲಿದೆ. ಹೀಗಾಗಿ ಉಡುಪಿ, ಉತ್ತರ ಕನ್ನಡ, ಬೆಳಗಾವಿ, ಧಾರವಾಡ ಮತ್ತು ಗದಗ ಜಿಲ್ಲೆಗಳಲ್ಲಿ ರೆಡ್ ಅಲರ್ಟ್ ಘೋಷಿಸಲಾಗಿದೆ.

ಬಾಗಲಕೋಟೆ, ಹಾವೇರಿ, ಕೊಪ್ಪಳ, ವಿಜಯಪುರ ಮತ್ತು ಶಿವಮೊಗ್ಗ ಜಿಲ್ಲೆಗಳಿಗೆ ಐಎಂಡಿ ಆರೆಂಜ್ ಅಲರ್ಟ್ ನೀಡಿದೆ. ಈ ಭಾಗದಲ್ಲಿ ಮಳೆ ಜತೆಗೆ ಗಾಳಿಯು ಗಂಟೆಗೆ 40-50 ಕಿ.ಮೀ ಇರಲಿದೆ. ದಕ್ಷಿಣ ಕನ್ನಡ, ಕಲಬುರಗಿ, ರಾಯಚೂರು, ಯಾದಗಿರಿ, ಬಳ್ಳಾರಿ, ಚಿಕ್ಕಮಗಳೂರು ಮತ್ತು ದಾವಣಗೆರೆ ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್ ಘೋಷಿಸಿದೆ.

ಮೀನುಗಾರರು ಸಮುದ್ರಕ್ಕಿಳಿಯದಂತೆ ಎಚ್ಚರಿಕೆ

ಕರ್ನಾಟಕ ಕರಾವಳಿಯಲ್ಲಿ ಗಂಟೆಗೆ 45 ರಿಂದ 55 ಕಿ.ಮೀ ವೇಗದಲ್ಲಿ ಗಾಳಿ ಬೀಸುವ ಸಾಧ್ಯತೆಯಿದೆ. ಹೀಗಾಗಿ ಜೂನ್ 10 ರಿಂದ 12 ರವರೆಗೆ ಮೀನುಗಾರರು ಸಮುದ್ರ ಪ್ರದೇಶಗಳಿಗೆ ಹೋಗದಂತೆ ಸೂಚಿಸಲಾಗಿದೆ.

ಈ ಸಂಗತಿಯ ಕುರಿತು ನಿಮ್ಮ ಅನಿಸಿಕೆ ಏನು? ಕಾಮೆಂಟ್ ಮೂಲಕ ತಿಳಿಸಿ

Continue Reading
Advertisement
Nagarjuna Sagar
ಪ್ರವಾಸ20 mins ago

Nagarjuna Sagar: ನಾಗಾರ್ಜುನಸಾಗರದ ಈ ಸ್ಥಳಗಳು ವಾರಾಂತ್ಯ ಪ್ರವಾಸಕ್ಕೆ ಸೂಕ್ತ

Actor Darshan
ಪ್ರಮುಖ ಸುದ್ದಿ24 mins ago

ರಾಜಮಾರ್ಗ ಅಂಕಣ : ನನ್ನ ಬದುಕೇ ಬೇರೆ, ನನ್ನ ಸಿನಿಮಾನೇ ಬೇರೆ ಅಂದರೆ ಹೀಗೇ ಆಗೋದು!

Job Alert
ಉದ್ಯೋಗ39 mins ago

Job Alert: ಎಚ್‌ಎಎಲ್‌ನಲ್ಲಿದೆ ಉದ್ಯೋಗಾವಕಾಶ; ಡಿಪ್ಲೋಮಾ ಪಾಸಾದವರು ಅಪ್ಲೈ ಮಾಡಿ

Actor Darshan political leaders appeal to the CM and Home Minister not to twist case
ಸ್ಯಾಂಡಲ್ ವುಡ್41 mins ago

Actor Darshan : ದರ್ಶನ್‌ ಪರ ವಹಿಸಿ ಸಿಎಂ, ಗೃಹ ಸಚಿವರಿಗೆ ಮನವಿ ಮಾಡಿದ್ರಾ ರಾಜಕೀಯ ನಾಯಕರು?

Actor Darshan Renukaswamy Send His Photos To Pavitra Gowda
ಸ್ಯಾಂಡಲ್ ವುಡ್44 mins ago

Actor Darshan: ಪವಿತ್ರಾಗೆ ಮರ್ಮಾಂಗದ ಫೋಟೊ ಕಳುಹಿಸಿದ್ರಾ ರೇಣುಕಾಸ್ವಾಮಿ? ದರ್ಶನ್​ಗೆ ತಿಳಿದಿದ್ದು ಹೇಗೆ?

Fraud Case
ಕ್ರೈಂ49 mins ago

Fraud Case: 300 ರೂ. ಬೆಲೆಯ ನಕಲಿ ಆಭರಣವನ್ನು ವಿದೇಶಿ ಮಹಿಳೆಗೆ 6 ಕೋಟಿ ರೂ.ಗೆ ಮಾರಿದರು!

Vastu Tips
ಧಾರ್ಮಿಕ1 hour ago

Vastu Tips: ಈ ನಕಾರಾತ್ಮಕ ವಸ್ತುಗಳನ್ನು ಮನೆಯಲ್ಲಿ ಇಡಲೇಬೇಡಿ!

Altroz Racer launched by Tata Motors
ಕರ್ನಾಟಕ1 hour ago

Tata Motors: ಟಾಟಾ ಮೋಟಾರ್ಸ್‌ನಿಂದ ʼಆಲ್ಟ್ರೋಜ್ ರೇಸರ್ʼ ಬಿಡುಗಡೆ; ದರ ಎಷ್ಟು?

Pawan Kalyan
ದೇಶ1 hour ago

Pawan Kalyan: ಆಂಧ್ರ ಪ್ರದೇಶದ ಉಪ ಮುಖ್ಯಮಂತ್ರಿಯಾಗಿ ಪವನ್‌ ಕಲ್ಯಾಣ್‌ ಆಯ್ಕೆ; ಇಂದು ಪ್ರಮಾಣ ವಚನ ಸ್ವೀಕಾರ

Minister Dinesh Gundurao drives 10 days Yogotsava programme in Bengaluru
ಕರ್ನಾಟಕ1 hour ago

Bengaluru News: 10 ದಿನಗಳ ‘ಯೋಗೋತ್ಸವ’ಕ್ಕೆ ಸಚಿವ ದಿನೇಶ್ ಗುಂಡೂರಾವ್ ಚಾಲನೆ

Sharmitha Gowda in bikini
ಕಿರುತೆರೆ8 months ago

Geetha Serial Kannada: ನಿದ್ದೆ ಕದ್ದ ಚೋರಿ! ನಟಿ `ಭಾನುಮತಿ’ ಹಾಟ್‌ ಪೋಟೊಗಳಿಗೆ ಫ್ಯಾನ್ಸ್ ಫುಲ್ ಫಿದಾ

Kannada Serials
ಕಿರುತೆರೆ8 months ago

Kannada Serials TRP: 2ನೇ ಸ್ಥಾನದಲ್ಲಿ 2 ಧಾರಾವಾಹಿಗಳು; ಟಿಆರ್‌ಪಿ ರೇಸ್‌ನಲ್ಲಿಲ್ಲ ಭಾಗ್ಯಲಕ್ಷ್ಮೀ!

Bigg Boss- Saregamapa 20 average TRP
ಕಿರುತೆರೆ8 months ago

Kannada Serials TRP: ಏಳನೇ ಸ್ಥಾನಕ್ಕೆ ʻಅಮೃತಧಾರೆʼ ಕುಸಿತ; ಬಿಗ್‌ ಬಾಸ್‌-ಸರಿಗಮಪ ಟಿಆರ್‌ಪಿ ಎಷ್ಟು?

galipata neetu
ಕಿರುತೆರೆ6 months ago

Kanyadana Serial: ಕಿರುತೆರೆಗೆ ಮತ್ತೆ ಎಂಟ್ರಿ ಕೊಟ್ಟ ʻಗಾಳಿಪಟʼ ಖ್ಯಾತಿಯ ʻನೀತುʼ!

Kannada Serials
ಕಿರುತೆರೆ9 months ago

Kannada Serials TRP: ನಾಲ್ಕನೇ ಸ್ಥಾನಕ್ಕೆ ಕುಸಿತ ಕಂಡ ʻಸೀತಾ ರಾಮʼ; ಟಿಆರ್‌ಪಿ ರೇಸ್‌ಗೆ ʻಭಾಗ್ಯಲಕ್ಷ್ಮಿʼ ಬ್ಯಾಕ್‌!

Kannada Serials
ಕಿರುತೆರೆ8 months ago

Kannada Serials TRP: ಟಿಆರ್‌ಪಿಯಲ್ಲಿ ʻಭಾಗ್ಯಲಕ್ಷ್ಮೀʼ ಹವಾ; ʻಪುಟ್ಟಕ್ಕನ ಮಕ್ಕಳುʼ ಧಾರಾವಾಹಿಗೆ ಸಂಕಷ್ಟ!

Bigg Boss' dominates TRP; Sita Rama fell to the sixth position
ಕಿರುತೆರೆ8 months ago

Kannada Serials TRP: ಟಿಆರ್‌ಪಿಯಲ್ಲಿ ʻಬಿಗ್ ಬಾಸ್ʼದೇ ಮೇಲುಗೈ; 6ನೇ ಸ್ಥಾನಕ್ಕೆ ಕುಸಿದ ʻಸೀತಾ ರಾಮʼ

geetha serial Dhanush gowda engagement
ಕಿರುತೆರೆ6 months ago

Dhanush Gowda: ಗೀತಾ ಧಾರಾವಾಹಿ ನಟನ ನಿಶ್ಚಿತಾರ್ಥ; ಭವ್ಯಾಳ ಕಮೆಂಟ್‌ ಬಾಕ್ಸ್‌ ಆಫ್‌!

varun
ಕಿರುತೆರೆ7 months ago

Brindavana Serial: ʼಬೃಂದಾವನʼ ಧಾರಾವಾಹಿಯಲ್ಲಿ ದೊಡ್ಡ ಟ್ವಿಸ್ಟ್‌; ಪ್ರಮುಖ ಪಾತ್ರಧಾರಿಯೇ ಬದಲು

Kannada Serials
ಕಿರುತೆರೆ9 months ago

Kannada Serials TRP: ಟಿಆರ್‌ಪಿಯಲ್ಲಿ ಏರಿಕೆ ಕಂಡ ʻಅಮೃತಧಾರೆʼ; ʻಗಟ್ಟಿಮೇಳʼಕ್ಕೆ ನಾಲ್ಕನೇ ಸ್ಥಾನ!

karnataka weather Forecast
ಮಳೆ17 hours ago

Karnataka Weather : ಭಾರಿ ಮಳೆಗೆ ಗುಡ್ಡದಿಂದ ಉರುಳಿ ಬಿದ್ದ ಬಂಡೆಗಲ್ಲು; ಬೆಂಗಳೂರಲ್ಲೂ ಸಂಜೆ ವರ್ಷಧಾರೆ

actor Darshan
ಚಿತ್ರದುರ್ಗ18 hours ago

Actor Darshan: ರೇಣುಕಾ ಸ್ವಾಮಿ ಕೊಲೆ ಕೇಸ್‌ನಲ್ಲಿ ದರ್ಶನ್‌ ಅರೆಸ್ಟ್‌; ಪ್ರಕರಣವನ್ನು ಸಿಬಿಐಗೆ ವಹಿಸಲು ಒತ್ತಾಯ

Actor Darshan gets a series of questions from the police
ಸಿನಿಮಾ19 hours ago

Actor Darshan : ಪವಿತ್ರಗೌಡ ಬಗ್ಗೆ ಪೋಸ್ಟ್‌ ಮಾಡಿದ್ರೆ ನಿಮಗ್ಯಾಕೆ ಕೋಪ? ದರ್ಶನ್‌ಗೆ ಪೊಲೀಸರ ಪ್ರಶ್ನೆಗಳ ಸುರಿಮಳೆ

Actor Darshan
ಸಿನಿಮಾ20 hours ago

Actor Darshan : ದರ್ಶನ್‌ ಜೈಲಿಗೆ ಹೋಗುತ್ತಿರುವುದು ಇದೇ ಮೊದಲಲ್ಲ; ನಟನ ಮೇಲಿವೆ ಹತ್ತಾರು ಕೇಸ್‌ಗಳು!

Saptami Gowda
ಸಿನಿಮಾ23 hours ago

Saptami Gowda : ಯುವ ಪತ್ನಿ ಶ್ರೀದೇವಿ ವಿರುದ್ಧ ಮಾನಹಾನಿ ಕೇಸ್; ಕಾನೂನು ಹೋರಾಟಕ್ಕೆ ಮುಂದಾದ ನಟಿ ಸಪ್ತಮಿ ಗೌಡ!

Karnataka weather Forecast
ಮಳೆ2 days ago

Karnataka Weather : ಭಾರಿ ಮಳೆಗೆ ಮನೆ ಗೋಡೆ ಕುಸಿದು ಎಮ್ಮೆಗಳು ಸಾವು; ಆಕಳಿನ ಜೀವ ತೆಗೆದ ವಿದ್ಯುತ್‌ ತಂತಿ

Karnataka weather Forecast
ಮಳೆ5 days ago

Karnataka weather : ಮಳೆಯಲ್ಲೆ ತಪಸ್ಸಿಗೆ ಕುಳಿತ ವೃದ್ಧ; ಇನ್ನೊಂದು ವಾರ ನಾನ್‌ ಸ್ಟಾಪ್‌ ವರುಣನ ಅಬ್ಬರ

Sigandur launch
ಶಿವಮೊಗ್ಗ5 days ago

Sigandur launch: ಸಿಗಂದೂರು ಲಾಂಚ್‌ನಲ್ಲಿ ಭಾರಿ ವಾಹನಗಳಿಗೆ ನಿರ್ಬಂಧ

Karnataka Rain
ಮಳೆ6 days ago

Karnataka Rain : ಭಾರಿ ಮಳೆಗೆ ಮರ ಬಿದ್ದು ಮೇಕೆಗಳು ಸಾವು; ಸಿಡಿಲಿಗೆ ಎಲೆಕ್ಟ್ರಿಕ್‌ ಅಂಗಡಿ ಸುಟ್ಟು ಭಸ್ಮ

Lok Sabha Election Result 2024 Live
ದೇಶ1 week ago

Lok Sabha Election Result 2024 Live: ಲೋಕಸಭೆ ಚುನಾವಣೆ ಫಲಿತಾಂಶದ ಲೈವ್‌ ಇಲ್ಲಿ ವೀಕ್ಷಿಸಿ

ಟ್ರೆಂಡಿಂಗ್‌