Lok Sabha Election 2024 : ಲೋಕಸಭೆ ಟಾರ್ಗೆಟ್‌ 20: ರಾಜ್ಯ ಕೈ ನಾಯಕರಿಗೆ ಡೆಲ್ಲಿ ಫಾರ್ಮುಲಾ! - Vistara News

ಕರ್ನಾಟಕ

Lok Sabha Election 2024 : ಲೋಕಸಭೆ ಟಾರ್ಗೆಟ್‌ 20: ರಾಜ್ಯ ಕೈ ನಾಯಕರಿಗೆ ಡೆಲ್ಲಿ ಫಾರ್ಮುಲಾ!

Lok Sabha Election 2024 : ರಾಜ್ಯ ಕಾಂಗ್ರೆಸ್‌ನಲ್ಲಿ ಎಲ್ಲವೂ ಸರಿಯಿಲ್ಲ ಎಂಬುದು ಇತ್ತೀಚಿನ ರಾಜಕೀಯ ಬೆಳವಣಿಗೆಯಲ್ಲಿ ಸಾಬೀತಾಗಿದೆ. ಈ ಹಿನ್ನೆಲೆಯಲ್ಲಿ ಮುಂದಿನ ಲೋಕಸಭಾ ಚುನಾವಣೆಯಲ್ಲಿ ಒಗ್ಗಟ್ಟಿನಿಂದ ಕೆಲಸ ಮಾಡವಂತೆ ಮಾಡಲು ಹೈಕಮಾಂಡ್‌ ಪ್ಲ್ಯಾನ್‌ ಮಾಡಿದೆ. ಇದಕ್ಕಾಗಿ ಆಗಸ್ಟ್‌ 2ರಂದು ನವ ದೆಹಲಿಯಲ್ಲಿ ರಾಜ್ಯ ಪ್ರಮುಖರ ಸಭೆ ಕರೆಯಲಾಗಿದೆ.

VISTARANEWS.COM


on

Rahul Gandhi CM Siddaramaiah DCM DK Shivakumar and AICC Precident Mallikarjuna kharge
ಮಹತ್ವದ, ಕುತೂಹಲಕರ ಸುದ್ದಿಗಾಗಿ ಫಾಲೊ ಮಾಡಿ
Koo

ಬೆಂಗಳೂರು: ಮುಂದಿನ ವರ್ಷ ನಡೆಯಲಿರುವ ಲೋಕಸಭಾ ಚುನಾವಣೆಯನ್ನು (Lok Sabha Election 2024) ಕಾಂಗ್ರೆಸ್‌ ಪ್ರತಿಷ್ಠೆಯಾಗಿ ಪರಿಗಣಿಸಿದೆ. ಆದರೆ, ಪ್ರಸ್ತುತ ರಾಜ್ಯ ರಾಜಕೀಯ ಬೆಳವಣಿಗೆಯಿಂದ (Political Development) ಕಂಗೆಟ್ಟಿದೆ. ಪಕ್ಷದಲ್ಲಿ ಆಂತರಿಕ ಭಿನ್ನಮತ ಇರುವುದು ತೀವ್ರ ತಲೆನೋವನ್ನು ತಂದೊಡ್ಡಿದೆ. ಈ ಹಿನ್ನೆಲೆಯಲ್ಲಿ ಹೈಕಮಾಂಡ್‌ (Congress High Command) ನಾಯಕರು ರಾಜ್ಯ ನಾಯಕರಿಗೆ ಒಗ್ಗಟ್ಟಿನ ಪಾಠವನ್ನು ಮಾಡಿದೆ.

ಈ ಸಂಬಂಧ ಮುಂದೆ ಏನೇನು ಮಾಡಬೇಕು? ಕಾರ್ಯತಂತ್ರ, ಚುನಾವಣಾ ರಣತಂತ್ರ ಹೇಗಿರಬೇಕು? ಸರ್ಕಾರಿ ಯೋಜನೆಗಳ ಬಗ್ಗೆ ಜನರಿಗೆ ಹೇಗೆ ಮನದಟ್ಟು ಮಾಡಬೇಕು? ಎಂಬಿತ್ಯಾದಿ ವಿಷಯಗಳ ಜತೆಗೆ ನಾಯಕರಲ್ಲಿ ಒಮ್ಮತ ಹಾಗೂ ಒಗ್ಗಟ್ಟು ಮೂಡಿಸಲು ಹೈಕಮಾಂಡ್‌ ನಿರ್ಧಾರ ಮಾಡಿದೆ. ಈ ಹಿನ್ನೆಲೆಯಲ್ಲಿ ಆಗಸ್ಟ್ 2ರಂದು ರಾಜ್ಯ ಕಾಂಗ್ರೆಸ್ ನಾಯಕರನ್ನು ನವ ದೆಹಲಿಗೆ ಕರೆಸಿಕೊಳ್ಳುತ್ತಿದೆ.

ಸಿಎಂ ಸಿದ್ದರಾಮಯ್ಯಗೆ ತಲೆನೋವು!

ಶಾಸಕರ ಹಾಗೂ ಸಚಿವರ ನಡುವೆ ಸಮನ್ವಯ ಮೂಡಿಸಲು ಸಿಎಂ ಸಿದ್ದರಾಮಯ್ಯ (CM Siddaramaiah) ಪ್ಲ್ಯಾನ್ ಮಾಡಿದ್ದಾರೆ. ಹಿರಿಯ ಸಚಿವರ ಹಾಗೂ ನಾಯಕರ‌ ಸಹಮತ ಪಡೆಯುವ ಪ್ರಯತ್ನದ ನಡುವೆಯೂ ಸಿಎಂಗೆ ಇಲ್ಲಿನ ಕೆಲ ಬೆಳವಣಿಗೆಗಳು ತಲೆ ನೋವು ತಂದಿದೆ.

ಈಗಾಗಲೇ ಸಿಎಂ ಸಿದ್ದರಾಮಯ್ಯ ವಿರುದ್ಧ ವಿಧಾನ ಪರಿಷತ್‌ ಸದಸ್ಯ ಬಿ.ಕೆ ಹರಿಪ್ರಸಾದ್ (BK Hariprasad) ಕೆಂಡ ಕಾರುತ್ತಿದ್ದಾರೆ. ಸಮುದಾಯವನ್ನು ಕಡೆಗಣಿಸಿದ್ದಾರೆ ಎಂಬ ಪ್ರಬಲ ಅಸ್ತ್ರವನ್ನು ಹರಿಪ್ರಸಾದ್ ಹೂಡಿದ್ದಾರೆ. ಹೀಗಾಗಿ ಎಲ್ಲ ಭಿನ್ನಮತ ಶಮನ ಮಾಡಿ ಲೋಕಸಭೆಗೆ ತಯಾರಿ ಮಾಡುವ ನಿಟ್ಟಿನಲ್ಲಿ ಕಾಂಗ್ರೆಸ್ ಹೈಕಮಾಂಡ್ ಮುಂದಾಗಿದೆ.

ಕಾಂಗ್ರೆಸ್ ಹೈಕಮಾಂಡ್ ಆಗಸ್ಟ್ 2ರಂದು ಎರಡು ಸಭೆಯನ್ನು ನಡೆಸಲಿದೆ. ಮೊದಲ ಸಭೆಯಲ್ಲಿ ಲೋಕಸಭೆ ದೃಷ್ಟಿಯಿಂದ ಪಕ್ಷ ಸಂಘಟನೆ ಬಗ್ಗೆ ಚರ್ಚೆ ನಡೆಸಲಾಗುತ್ತಿದೆ. ಸಿಎಂ ಸಿದ್ದರಾಮಯ್ಯ, ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್ (DK Shivakumar) ಈ ಸಭೆಯಲ್ಲಿ ಭಾಗಿಯಾಗಲಿದ್ದಾರೆ. ಅಲ್ಲದೆ, ಕೆಪಿಸಿಸಿ ಕಾರ್ಯಾಧ್ಯಕ್ಷರಾದ ಸಲೀಂ ‌ಅಹಮದ್, ಬಿ.ಎನ್ ಚಂದ್ರಪ್ಪ, ಸತೀಶ್ ಜಾರಕಿಹೊಳಿ, ಈಶ್ವರ್ ಖಂಡ್ರೆ, ರಾಮಲಿಂಗಾರೆಡ್ಡಿ, ಕಾಂಗ್ರೆಸ್ ‌ಹಿರಿಯ ನಾಯಕರಾದ ಬಿ.ಕೆ. ಹರಿಪ್ರಸಾದ್, ಮುನಿಯಪ್ಪ, ಬಿ.ಎಲ್. ಶಂಕರ್, ವೀರಪ್ಪ ಮೊಯ್ಲಿ, ಎಂ.ಬಿ. ಪಾಟೀಲ್, ಆರ್.ವಿ. ದೇಶಪಾಂಡೆ ಸೇರಿದಂತೆ ಹಿರಿಯ ನಾಯಕರು ಭಾಗಿಯಾಗಲಿದ್ದಾರೆ.

ಟಾರ್ಗೆಟ್‌ 20

ಮುಂದಿನ ಲೋಕಸಭಾ ಚುನಾವಣೆಯಲ್ಲಿ ಎಷ್ಟು ಸ್ಥಾನಗಳನ್ನು ಗೆಲ್ಲಬೇಕು ಎಂದು ರಾಜ್ಯ ಕಾಂಗ್ರೆಸ್‌ ಗುರಿಯನ್ನು ಹಾಕಿಕೊಂಡಿದೆ. ಅದರ ಪ್ರಕಾರ 20 ಸ್ಥಾನವನ್ನು ಗೆಲ್ಲುವ ಟಾರ್ಗೆಟ್‌ ಇಟ್ಟುಕೊಂಡಿದೆ. ಈ ಹಿನ್ನೆಲೆಯಲ್ಲಿ ಚುನಾವಣಾ ಕಾರ್ಯತಂತ್ರ ಹೇಗಿರಬೇಕು? ಎಂಬ ಬಗ್ಗೆ ಈ ಮೊದಲ ಸಭೆಯಲ್ಲಿ ಚರ್ಚೆಯಾಗಲಿದೆ.

ಎರಡನೇ ಸಭೆಯಲ್ಲಿ ರಾಜ್ಯ ಸಚಿವರಿಗೆ ಲೋಕಸಭೆ ಟಾಸ್ಕ್

ಇನ್ನು ಎರಡನೇ ಸಭೆಯಲ್ಲಿ ರಾಜ್ಯ ಸಚಿವರಿಗೆ ಲೋಕಸಭೆ ಟಾಸ್ಕ್ ನೀಡಲಾಗುತ್ತಿದೆ. ಇದು ರಾಜ್ಯ ಸಚಿವರ ಜತೆಗೆ ನಡೆಯುವ ಮಹತ್ವದ ಸಭೆಯಾಗಿದೆ. ಸರ್ಕಾರದಲ್ಲಿ ಶಾಸಕರು ವರ್ಸಸ್ ಸಚಿವರು ಎನ್ನುವಂತಹ ಪರಿಸ್ಥಿತಿ ನಿರ್ಮಾಣವಾಗಿದೆ. ಈಗಷ್ಟೇ ಶಾಸಕರು ಹಾಗೂ ಸಚಿವರ ಮುನಿಸಿನ ಕುರಿತು ಶಾಸಕಾಂಗ ಪಕ್ಷದ ಸಭೆ ನಡೆಸಲಾಗಿದೆ. ಆದರೆ, ಇದಕ್ಕೊಂದು ಚೌಕಟ್ಟು ನೀಡಲು ನಿರ್ಧರಿಸಲಾಗಿದ್ದು, ಕಾಂಗ್ರೆಸ್‌ ನಾಯಕರಾದ ರಾಹುಲ್ ಗಾಂಧಿ ಹಾಗೂ ಮಲ್ಲಿಕಾರ್ಜುನ ಖರ್ಗೆ ಇವರೊಂದಿಗೆ ಸಭೆ ನಡೆಸಲಿದ್ದಾರೆ.

ವರ್ಕ್‌ ರಿಪೋರ್ಟ್‌ ಪರಿಶೀಲನೆ

ಸಚಿವರ ಕಾರ್ಯವೈಖರಿ, ಪ್ರಗತಿ ಕುರಿತು ಸಭೆಯಲ್ಲಿ ಚರ್ಚೆ ನಡೆಯಲಿದೆ. ಸಚಿವರ ಕಾರ್ಯವೈಖರಿ ಬಗ್ಗೆ ಹೈಕಮಾಂಡ್ ನಿಗಾ ವಹಿಸುವ ಕುರಿತು ನಿರ್ದೇಶನ ನೀಡಲಾಗುತ್ತದೆ ಎನ್ನಲಾಗಿದೆ. ಸಚಿವರ ವರ್ಕ್ ರಿಪೋರ್ಟ್‌ ಮೇಲೆ ಆ ಸಚಿವರು ಮುಂದುವರಿಯಬೇಕಾ? ಬೇಡವಾ? ಎಂಬುದನ್ನು ಹೈಕಮಾಂಡ್ ತೀರ್ಮಾನ ಮಾಡಲಿದೆ ಎಂಬ ಎಚ್ಚರಿಕೆ ಸಂದೇಶವನ್ನು ಕಳುಹಿಸುವ ಸಾಧ್ಯತೆಯೂ ದಟ್ಟವಾಗಿದೆ ಎಂದು ಹೇಳಲಾಗುತ್ತಿದೆ.

ಅಲ್ಲದೆ, ಶಾಸಕರನ್ನು ವಿಶ್ವಾಸಕ್ಕೆ ಪಡೆಯುವ, ಸರ್ಕಾರದ ವರ್ಚಸ್ಸು ಹೆಚ್ಚಿಸುವ ಟಾಸ್ಕ್ ಅನ್ನು ಸಹ ನೀಡಲಾಗುತ್ತದೆ. ಜವಾಬ್ದಾರಿ ವಹಿಸಿರುವ ಇಲಾಖೆಯ ಜನಪ್ರಿಯ ಯೋಜನೆಗಳನ್ನು ಹೆಚ್ಚೆಚ್ಚು ಪ್ರಚಾರ ಮಾಡುವುದು. ಲೋಕಸಭೆ ಚುನಾವಣೆಯಲ್ಲಿ ಕನಿಷ್ಠ 20 ಸ್ಥಾನ ಗೆಲ್ಲುವುದು ಸಹ ಈ ಸಭೆಯ ಪ್ರಮುಖ ಭಾಗವಾಗಿದೆ.

ಸಭೆಗಾಗಿ ಯಾರಿಗೆಲ್ಲ ಆಹ್ವಾನ ಬಂದಿದೆ?

  • ಸಿಎಂ ಸಿದ್ದರಾಮಯ್ಯ
  • ಡಿಸಿಎಂ ಡಿ.ಕೆ ಶಿವಕುಮಾರ್

ಭಾಗವಹಿಸಲಿರುವ ಸಚಿವರ ಪಟ್ಟಿ

  • ಡಾ.ಜಿ ಪರಮೇಶ್ವರ್
  • ಎಂ.ಬಿ. ಪಾಟೀಲ್
  • ಸತೀಶ್ ಜಾರಕಿಹೊಳಿ
  • ರಾಮಲಿಂಗಾರೆಡ್ಡಿ
  • ಈಶ್ವರ ಖಂಡ್ರೆ
  • ಎಚ್ ಕೆ.ಪಾಟೀಲ್
  • ಕೆ.ಎಚ್ ಮು‌ನಿಯಪ್ಪ
  • ದಿನೇಶ್ ಗುಂಡೂರಾವ್
  • ಕೃಷ್ಣಭೈರೇಗೌಡ
  • ಜಮೀರ್ ಅಹ್ಮದ್
  • ಚಲುವರಾಯಸ್ವಾಮಿ
  • ಎಚ್.ಸಿ ಮಹದೇವಪ್ಪ
  • ಶಿವಾನಂದ ಪಾಟೀಲ್
  • ಎಸ್.ಎಸ್ ಮಲ್ಲಿಕಾರ್ಜುನ
  • ಮಧುಬಂಗಾರಪ್ಪ
  • ಎನ್.ಎಸ್ ಬೋಸರಾಜು
  • ಪ್ರಿಯಾಂಕ್ ಖರ್ಗೆ

ಇದನ್ನೂ ಓದಿ: Lok Sabha Election 2024 : ಬೆಂಗಳೂರು ಗ್ರಾಮಾಂತರ ಕ್ಷೇತ್ರದಿಂದ ಡಿ.ಕೆ. ಸುರೇಶ್‌ ಆಪ್ತೆ ಕುಸುಮಾ ಕಣಕ್ಕೆ?

ಚುನಾವಣಾ ತಯಾರಿ- ಸಂಘಟನಾ ಚರ್ಚೆಗೆ ಇವರು ಭಾಗಿ

  • ರಾಘವೇಂದ್ರ ಹಿಟ್ನಾಳ್
  • ಈ ತುಕಾರಂ
  • ಸಲೀಂ ಅಹ್ಮದ್
  • ಚಂದ್ರಪ್ಪ
  • ಜಗದೀಶ್ ಶೆಟ್ಟರ್
  • ಲಕ್ಷ್ಮಣ ಸವದಿ
  • ಬಿ.ಕೆ. ಹರಿಪ್ರಸಾದ್
  • ಆರ್.ವಿ. ದೇಶಪಾಂಡೆ
  • ವಿನಯ್ ಕುಲಕರ್ಣಿ
  • ರಮೇಶ್ ಕುಮಾರ್
  • ಬಿ.ಎಲ್. ಶಂಕರ್
  • ಡಿ.ಕೆ. ಸುರೇಶ್
  • ಜಿ.ಸಿ. ಚಂದ್ರಶೇಖರ್
  • ಎಲ್. ಹನುಮಂತಯ್ಯ
ಕ್ಷಣ ಕ್ಷಣದ ಮಾಹಿತಿಗಾಗಿ Vistara News FaceBook ಪೇಜ್ ಫಾಲೋ ಮಾಡಿ
ಮಹತ್ವದ ಮಾಹಿತಿಗಾಗಿ ವಿಸ್ತಾರ ನ್ಯೂಸ್ ಆ್ಯಪ್ ಉಚಿತವಾಗಿ ಡೌನ್ ಲೋಡ್ ಮಾಡಿಕೊಳ್ಳಿ: Andriod App | IOS App
Continue Reading
Click to comment

Leave a Reply

Your email address will not be published. Required fields are marked *

ಕರ್ನಾಟಕ

Dengue Cases: ರಾಜ್ಯದಲ್ಲಿ ಸೋಮವಾರ 197 ಡೆಂಗ್ಯೂ ಕೇಸ್‌ಗಳು ಪತ್ತೆ, ಒಬ್ಬರ ಸಾವು

Dengue Cases: ರಾಜ್ಯದಲ್ಲಿ ಕಳೆದ 24 ಗಂಟೆಯಲ್ಲಿ 892 ಮಂದಿಗೆ ಟೆಸ್ಟ್‌ ನಡೆಸಿದ್ದು, ಈ ಪೈಕಿ 197 ಮಂದಿಗೆ ಡೆಂಗ್ಯೂ ದೃಢಪಟ್ಟಿದೆ.

VISTARANEWS.COM


on

Dengue Cases
Koo

ಬೆಂಗಳೂರು: ರಾಜ್ಯದಲ್ಲಿ ಕಳೆದ 24 ಗಂಟೆಯಲ್ಲಿ 197 ಡೆಂಗ್ಯೂ ಕೇಸ್‌ಗಳು (Dengue Cases) ಪತ್ತೆಯಾಗಿದ್ದು, ಒಬ್ಬರು ಮೃತಪಟ್ಟಿದ್ದಾರೆ. ಒಟ್ಟು ಸಕ್ರಿಯ ಪ್ರಕರಣಗಳ ಸಂಖ್ಯೆ 303ಕ್ಕೇರಿದ್ದು, ಬಿಬಿಎಂಪಿ ವ್ಯಾಪ್ತಿಯಲ್ಲೇ 95 ಮಂದಿಗೆ ಸೋಮವಾರ ಸೋಂಕು ತಗುಲಿದೆ. ಸೋಂಕಿತರ ಪೈಕಿ 46 ಮಂದಿ ಆಸ್ಪತ್ರೆಗಳಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ.

ಕಳೆದ 24 ಗಂಟೆಯಲ್ಲಿ 892 ಮಂದಿಗೆ ಟೆಸ್ಟ್‌ ನಡೆಸಿದ್ದು, ಈ ಪೈಕಿ 197 ಮಂದಿಗೆ ಡೆಂಗ್ಯೂ ದೃಢಪಟ್ಟಿದೆ. ಬಿಬಿಎಂಪಿ ವ್ಯಾಪ್ತಿಯಲ್ಲಿ 95, ಬೆಂಗಳೂರು ನಗರ 4, ಶಿವಮೊಗ್ಗ 16, ವಿಜಯಪುರ, ಬಾಗಲಕೋಟೆ, ಉತ್ತರ ಕನ್ನಡ ಜಿಲ್ಲೆಯಲ್ಲಿ ತಲಾ 3, ಕಲಬುರಗಿ 15, ಕೊಪ್ಪಳ 1, ಚಾಮರಾಜನಗರ 6, ಮಂಡ್ಯ 33, ಉಡುಪಿ 1, ಚಿಕ್ಕಮಗಳೂರು ಜಿಲ್ಲೆಯಲ್ಲಿ 17 ಮಂದಿಗೆ ಸೋಂಕು ತಗುಲಿದೆ. 197 ಮಂದಿಯಲ್ಲಿ 0-1 ವರ್ಷದೊಳಗಿನವರಲ್ಲಿ 1 ಮಗುವಿಗೆ, 1 ರಿಂದ 18 ವರ್ಷಗೊಳಗಿನ 63 ಮಂದಿಗೆ ಸೋಂಕು ತಗುಲಿದೆ.

ಇನ್ನು ರಾಜ್ಯದಲ್ಲಿ ಜನವರಿಯಿಂದ ಈವರೆಗೆ ಒಟ್ಟು 7362 ಮಂದಿ ಡೆಂಗ್ಯೂ ಪೀಡಿತರಾಗಿದ್ದು, 7 ಮಂದಿ ಮೃತಪಟ್ಟಿದ್ದಾರೆ. ಸಾವಿನ ಪ್ರಮಾಣ 0.09 ಇದೆ.

ಕಲುಷಿತ ನೀರು ಪೂರೈಕೆಯಾದ್ರೆ ಅಧಿಕಾರಿಗಳೇ ಹೊಣೆ; 15 ದಿನಕ್ಕೊಮ್ಮೆ ಕ್ವಾಲಿಟಿ ಟೆಸ್ಟ್ ಮಾಡಿ ಎಂದ ಸಿಎಂ

ಬೆಂಗಳೂರು: ರಾಜ್ಯದಲ್ಲಿ ಡೆಂಗ್ಯೂ ಪ್ರಕರಣಗಳ (Dengue Cases) ಏರಿಕೆ ಹಿನ್ನೆಲೆಯಲ್ಲಿ ಆರೋಗ್ಯ ಇಲಾಖೆ ಮುನ್ನೆಚ್ಚರಿಕಾ ಕ್ರಮಗಳನ್ನು ಕೈಗೊಳ್ಳುತ್ತಿದೆ. ಲಾರ್ವಾ ಸಮೀಕ್ಷೆ, ಸೊಳ್ಳೆ ನಿಯಂತ್ರಣದ ಜತೆಗೆ ಮನೆಮನೆಗೆ ತೆರಳಿ ಆರೋಗ್ಯ ಜಾಗೃತಿ ಮೂಡಿಸುವ ಕೆಲಸ ನಡೆಯುತ್ತಿದೆ. ಈ ನಡುವೆ ನಗರಾಭಿವೃದ್ಧಿ ಇಲಾಖೆ ಅಧಿಕಾರಿಗಳ ಜತೆ ಸಭೆ ನಡೆಸಿರುವ ಸಿಎಂ ಸಿದ್ದರಾಮಯ್ಯ ಅವರು, ಜನರಿಗೆ ಕಲುಷಿತ ನೀರು ಪೂರೈಕೆಯಾಗದಂತೆ ಎಚ್ಚರಿಕೆ ವಹಿಸಬೇಕು. ಪ್ರತಿ 15 ದಿನಗಳಿಗೊಮ್ಮೆ ನೀರಿನ ಮೂಲಗಳಲ್ಲಿ ಕಡ್ಡಾಯವಾಗಿ ಗುಣಮಟ್ಟ ಪರೀಕ್ಷೆ ನಡೆಸಬೇಕು ಎಂದು ಸೂಚನೆ ನೀಡಿದ್ದಾರೆ.

ಇದನ್ನೂ ಓದಿ | Uttara Kannada News: ಕರಾವಳಿ ಭಾಗದಲ್ಲಿ ವ್ಯಾಪಕ ಮಳೆ, 12 ಕಾಳಜಿ ಕೇಂದ್ರಗಳಲ್ಲಿ 437 ಜನರಿಗೆ ಆಸರೆ

ಕಲುಷಿತ ನೀರಿನಿಂದ ಯಾವುದೇ ತೊಂದರೆ ಉಂಟಾದರೆ ಸಂಬಂಧಪಟ್ಟ ಅಧಿಕಾರಿಯನ್ನು ನೇರ ಜವಾಬ್ದಾರಿ ಮಾಡಲಾಗುವುದು. ತುಕ್ಕು ಹಿಡಿದ ಹಳೆಯ ಪೈಪ್‌ ಬದಲಾವಣೆ ಮಾಡಬೇಕು. ಪ್ರತಿ 15 ದಿನಗಳಿಗೊಮ್ಮೆ ನೀರಿನ ಮೂಲದಲ್ಲಿ ಹಾಗೂ ವಿತರಣಾ ಬಿಂದುವಿನಲ್ಲಿನ ನೀರಿನ ಗುಣಮಟ್ಟವನ್ನು ಪ್ರಯೋಗಾಲಯದಲ್ಲಿ ಕಡ್ಡಾಯವಾಗಿ ಪರೀಕ್ಷೆ ಮಾಡಬೇಕು. ನೀರಿನ ಗುಣಮಟ್ಟ ಪರೀಕ್ಷೆಯಲ್ಲಿ ವಿಫಲವಾದ ಕಡೆಗಳಲ್ಲಿ ಹೊಸ ಮೂಲದಿಂದ ನೀರು ಪೂರೈಕೆ ಮಾಡಬೇಕು ಎಂದು ತಿಳಿಸಿದ್ದಾರೆ.

ಎಲ್ಲಾ ಜಿಲ್ಲೆಗಳಲ್ಲಿ ಆದಷ್ಟು ಬೇಗನೆ ಘನ ತ್ಯಾಜ್ಯ ವಿಲೇವಾರಿ ಘಟಕಗಳನ್ನು ಆರಂಭಿಸಬೇಕು. ಇನ್ನೂ 55 ಕಡೆಗಳಲ್ಲಿ ಘನತ್ಯಾಜ್ಯ ಘಟಕಗಳ ನಿರ್ಮಾಣ ಪ್ರಕ್ರಿಯೆ ನಡೆಯುತ್ತಿದ್ದು, ಆದಷ್ಟು ಬೇಗನೆ ಟೆಂಡರ್‌ ಪ್ರಕ್ರಿಯೆ ಪೂರ್ಣಗೊಳಿಸಬೇಕು. ತ್ಯಾಜ್ಯ ನೀರು ಶುದ್ಧೀಕರಣ ಘಟಕ ಕಾರ್ಯಾರಂಭಿಸುವ ಮೂಲಕ ಕೊಳಚೆ ನೀರು ನೇರವಾಗಿ ಕೆರೆಗಳಿಗೆ ಸೇರುವುದನ್ನು ತಪ್ಪಿಸಬೇಕು. ಮೈಸೂರಿನ ದಳವಾಯಿ ಕೆರೆಗೆ ಕೊಳಚೆ ನೀರು ಸೇರುವುದನ್ನು ಸಂಪೂರ್ಣವಾಗಿ ತಪ್ಪಿಸಬೇಕು ಎಂದು ಹೇಳಿದ್ದಾರೆ.

Continue Reading

ಯಾದಗಿರಿ

Yadgiri News: ಅಖಿಲ ಭಾರತ ವೀರಶೈವ ಮಹಾಸಭಾ ನೂತನ ಜಿಲ್ಲಾಧ್ಯಕ್ಷರಾಗಿ ಚನ್ನಪ್ಪಗೌಡ ಮೋಸಂಬಿ ಅವಿರೋಧ ಆಯ್ಕೆ

Yadgiri News: ಅಖಿಲ ಭಾರತ ವೀರಶೈವ ಮಹಾಸಭಾದ ಚುನಾವಣೆಯಲ್ಲಿ ಯಾದಗಿರಿಯ ನೂತನ ಜಿಲ್ಲಾಧ್ಯಕ್ಷರಾಗಿ ಚನ್ನಪ್ಪಗೌಡ ಮೋಸಂಬಿ ಹಾಗೂ ಯಾದಗಿರಿ ತಾಲೂಕಾ ಅಧ್ಯಕ್ಷರಾಗಿ ರಾಜಶೇಖರ ಪಾಟೀಲ ಅವಿರೋಧವಾಗಿ ಆಯ್ಕೆಯಾಗಿದ್ದಾರೆ.

VISTARANEWS.COM


on

Channappa Gowda Mosambi elected as new District President of Akhila bharata Veerashaiva Mahasabha
Koo

ಯಾದಗಿರಿ: ಅಖಿಲ ಭಾರತ ವೀರಶೈವ ಮಹಾಸಭಾದ ಚುನಾವಣೆಯಲ್ಲಿ ನೂತನ ಜಿಲ್ಲಾಧ್ಯಕ್ಷರಾಗಿ ಚನ್ನಪ್ಪಗೌಡ ಮೋಸಂಬಿ ಹಾಗೂ ಯಾದಗಿರಿ ತಾಲೂಕಾ ಅಧ್ಯಕ್ಷರಾಗಿ ರಾಜಶೇಖರ ಪಾಟೀಲ ಅವಿರೋಧವಾಗಿ (Yadgiri News) ಆಯ್ಕೆಯಾಗಿದ್ದಾರೆ.

ಸಮಾಜದ ಮುಖಂಡರು ಹಾಗೂ ಯುವಕರು ನೂತನವಾಗಿ ಆಯ್ಕೆಯಾದ ಜಿಲ್ಲಾಧ್ಯಕ್ಷ ಚನ್ನಪ್ಪಗೌಡ ಮೋಸಂಬಿ ಹಾಗೂ ತಾಲೂಕಾ ಅಧ್ಯಕ್ಷ ರಾಜಶೇಖರ ಪಾಟೀಲ ಅವರಿಗೆ ಗೌರವಿಸಿ, ಸನ್ಮಾನಿಸಿದರು.

ಇದನ್ನೂ ಓದಿ: CM Siddaramaiah: ಕ್ವಾರಿ ಗಣಿ ರಾಯಲ್ಟಿಯಲ್ಲಿ ಸರ್ಕಾರಕ್ಕೆ ವಂಚನೆ; ಕಠಿಣ ಕ್ರಮಕ್ಕೆ ಸಿಎಂ ಸೂಚನೆ

ಸನ್ಮಾನ ಸ್ವೀಕರಿಸಿ ಮಾತನಾಡಿದ ನೂತನ ಅಧ್ಯಕ್ಷ ಚನ್ನಪ್ಪಗೌಡ ಮೋಸಂಬಿ ಮಾತನಾಡಿ, ಹಿರಿಯರು ಹಾಗೂ ಸಮಾಜದ ಎಲ್ಲರ ಸಹಕಾರದಿಂದ ನನ್ನನ್ನು ನೂತನ ಅಧ್ಯಕ್ಷರನ್ನಾಗಿ ಆಯ್ಕೆ ಮಾಡಿದ್ದು ಎಲ್ಲರಿಗೂ ಧನ್ಯವಾದ ಸಲ್ಲಿಸಿದರು. ಎಲ್ಲರ ನಿರೀಕ್ಷೆ ತಕ್ಕಂತೆ ನನ್ನ ಅವಧಿಯಲ್ಲಿ ಉತ್ತಮ ಕೆಲಸ ಮಾಡುತ್ತೇನೆ. ಸಮಾಜದ ಅಭಿವೃದ್ಧಿಗೆ ಪ್ರಮಾಣಿಕ ಪ್ರಯತ್ನ ಮಾಡುವುದಾಗಿ ತಿಳಿಸಿದ ಅವರು, ವಿಶ್ವಗುರು ಬಸವೇಶ್ವರ ಮೂರ್ತಿ ಪ್ರತಿಷ್ಠಾಪನೆ ಮಾಡಲು ಪ್ರಯತ್ನ ಮಾಡುತ್ತೇನೆ ಎಂದರು.

ಇದಕ್ಕೂ ಮುನ್ನ ಅವಿರೋಧವಾಗಿ ಆಯ್ಕೆಯಾಗುತ್ತಿದ್ದಂತೆ ಸಮಾಜದ ಮುಖಂಡರು ಹಾಗೂ ಬೆಂಬಲಿಗರು, ಹತ್ತಿಕುಣಿ ವೃತ್ತದ ಸಮೀಪದಲ್ಲಿ ಪಟಾಕಿ ಸಿಡಿಸಿ, ಸಿಹಿ ಹಂಚಿ ಸಂಭ್ರಮಿಸಿದರು.

ಇದನ್ನೂ ಓದಿ: Kannada New Movie: ಗಣೇಶ್‌ ವೃತ್ತಿಜೀವನದ ಬಿಗ್ ಬಜೆಟ್ ಚಿತ್ರ ʼಕೃಷ್ಣಂ ಪ್ರಣಯ ಸಖಿʼ

ಈ ಸಂದರ್ಭದಲ್ಲಿ ಉಮ್ಮಾರೆಡ್ಡಿಗೌಡ ನಾಯ್ಕಲ್, ಸೂಗುಪ್ಪ ಬೆಳಗೇರಿ, ಶರಣಪ್ಪ ಜಾಕಾ, ಅಪ್ಪಣ್ಣ ಜೈನ್, ರುದ್ರಗೌಡ, ಇಂದೂಧರ ಸಿನ್ನೂರು,ಶಂಕ್ರೇಪ್ಪ, ಸುರೇಶ್, ಅವಿನಾಶ್ ಜಗನ್ನಾಥ್, ಡಾ. ಸಿದ್ದರಾಜರೆಡ್ಡಿ, ಮಂಜುನಾಥ ಜಡಿ ಸೇರಿದಂತೆ ಅನೇಕರು ಇದ್ದರು.

Continue Reading

ಕರ್ನಾಟಕ

land fraud: ಭೂ ವಂಚನೆ ತಡೆಗೆ ಪಹಣಿ-ಆಧಾರ್‌ ಜೋಡಣೆ ಪ್ರಕ್ರಿಯೆ ಶೀಘ್ರ ಪೂರ್ಣಗೊಳಿಸಿ: ಸಿಎಂ ಸಿದ್ದರಾಮಯ್ಯ

land fraud: ವಿವಿಧ ಇಲಾಖೆಗಳಿಗೆ ಅಭಿವೃದ್ಧಿ ಯೋಜನೆಗಳಿಗೆ ಅಗತ್ಯವಿರುವ ಭೂಮಿ ಪಡೆಯಲು ಆಯಾ ಇಲಾಖೆಯ ಜಿಲ್ಲಾ ಮಟ್ಟದ ಅಧಿಕಾರಿಗಳು ಪ್ರತಿ ತಿಂಗಳ ಕಂದಾಯ ಇಲಾಖೆ ಅಧಿಕಾರಿಗಳ ಸಭೆಯಲ್ಲಿ ಭಾಗವಹಿಸಿ ತಮ್ಮ ಅಗತ್ಯತೆಯನ್ನು ವಿವರಿಸುವಂತೆ ಸಿಎಂ ಸಿದ್ದರಾಮಯ್ಯ ಸೂಚಿಸಿದ್ದಾರೆ.

VISTARANEWS.COM


on

land fraud
Koo

ಬೆಂಗಳೂರು: ಜಮೀನು ಮಾರಾಟದಲ್ಲಿ ವಂಚನೆ (land fraud) ತಡೆಯಲು ಪಹಣಿ-ಆಧಾರ್‌ ಜೋಡಣೆ ಕೈಗೊಳ್ಳಲಾಗುತ್ತಿದೆ. ಈ ಪ್ರಕ್ರಿಯೆ ಶೀಘ್ರವೇ ಪೂರ್ಣಗೊಳಿಸಬೇಕು. ಒಬ್ಬರು ಮೂರ್ನಾಲ್ಕು ದಶಕಗಳಿಂದ ಜಮೀನು ಸಾಗುವಳಿ ಮಾಡುತ್ತಿದ್ದು, ಅದಕ್ಕೆ ಬೇರೆ ವ್ಯಕ್ತಿಗಳು ಭೂ ಮಂಜೂರಾತಿ ಮಾಡಿಸಿಕೊಳ್ಳುವ ಪ್ರಕರಣಗಳು ಹೆಚ್ಚಾಗುತ್ತಿವೆ. ಇಂತಹ ಸ್ಥಳಕ್ಕೆ ಭೇಟಿ ನೀಡಿ, ಮಹಜರು ನಡೆಸಿ ಭೂ ಮಂಜೂರಾತಿ ರದ್ದುಪಡಿಸಬೇಕು. ಭೂಮಿಯ ಸ್ವಾಧೀನ ಹೊಂದಿರುವವರಿಗೆ ಮಂಜೂರು ಮಾಡಬೇಕು ಎಂದು ಅಧಿಕಾರಿಗಳಿಗೆ ಸಿಎಂ ಸಿದ್ದರಾಮಯ್ಯ ಸೂಚಿಸಿದರು.

ನಗರದ ವಿಧಾನಸೌಧದಲ್ಲಿ ನಡೆದ ಅಧಿಕಾರಿಗಳ ಸಭೆಯಲ್ಲಿ ಮಾತನಾಡಿದರು. ವಿವಿಧ ಇಲಾಖೆಗಳಿಗೆ ಅಭಿವೃದ್ಧಿ ಯೋಜನೆಗಳಿಗೆ ಅಗತ್ಯವಿರುವ ಭೂಮಿ ಪಡೆಯಲು ಆಯಾ ಇಲಾಖೆಯ ಜಿಲ್ಲಾ ಮಟ್ಟದ ಅಧಿಕಾರಿಗಳು ಪ್ರತಿ ತಿಂಗಳ ಕಂದಾಯ ಇಲಾಖೆ ಅಧಿಕಾರಿಗಳ ಸಭೆಯಲ್ಲಿ ಭಾಗವಹಿಸಿ ತಮ್ಮ ಅಗತ್ಯತೆಯನ್ನು ವಿವರಿಸುವಂತೆ ಸೂಚಿಸಿದರು. ಜಿಲ್ಲಾಧಿಕಾರಿಗಳು ಸಹ ಈ ಅಗತ್ಯತೆಗಳಿಗೆ ತಕ್ಕಂತೆ ಭೂಮಿ ಒದಗಿಸಲು ಕ್ರಮ ಕೈಗೊಳ್ಳಬೇಕು ಎಂದು ಸೂಚಿಸಿದರು.

ರಾಜ್ಯದಲ್ಲಿ 1.40 ಕೋಟಿ ಎಕರೆ ಸರ್ಕಾರಿ ಜಮೀನು ಇದ್ದು, ಲ್ಯಾಂಡ್‌ ಬೀಟ್‌ ಮೊಬೈಲ್ ತಂತ್ರಾಂಶದ ಮೂಲಕ ದತ್ತಾಂಶ ಸೃಜಿಸಲಾಗಿದೆ. 14.32 ಲಕ್ಷ ಸರ್ಕಾರಿ ಜಮೀನುಗಳ ಸ್ಥಳ ಪರಿಶೀಲನೆಗೆ ಸೂಚಿಸಲಾಗಿದೆ. ಈ ಪೈಕಿ 10.78 ಲಕ್ಷ ಜಮೀನುಗಳಿಗೆ ಗ್ರಾಮಲೆಕ್ಕಾಧಿಕಾರಿಗಳು ಭೇಟಿ ನೀಡಿ ಪರಿಶೀಲಿಸಿದ್ದಾರೆ. ಇದರಲ್ಲಿ ಕಂದಾಯ ಇಲಾಖೆಯ 1.93 ಲಕ್ಷ ಜಮೀನುಗಳು ಇದ್ದು, ವಿವಿಧ 20 ಇಲಾಖೆಗಳ ಜಮೀನುಗಳನ್ನೂ ಗುರುತಿಸಲಾಗಿದೆ. ಕೆರೆ ಮತ್ತು ಸ್ಮಶಾನಗಳ ಹೆಚ್ಚುವರಿ ಜವಾಬ್ದಾರಿ ತೆಗೆದುಕೊಂಡು, ಸಮೀಕ್ಷೆ ನಡೆಸಲಾಗಿದೆ. ಒಟ್ಟು 91,000 ಜಮೀನುಗಳು ಒತ್ತವರಿಯಾಗಿರುವುದನ್ನು ಗುರುತಿಸಲಾಗಿದೆ ಎಂದು ಸಚಿವ ಕೃಷ್ಣ ಬೈರೇಗೌಡ ಅವರು ಮಾಹಿತಿ ನೀಡಿದರು.

ಇದನ್ನೂ ಓದಿ | CM Siddaramaiah: ಕ್ವಾರಿ ಗಣಿ ರಾಯಲ್ಟಿಯಲ್ಲಿ ಸರ್ಕಾರಕ್ಕೆ ವಂಚನೆ; ಕಠಿಣ ಕ್ರಮಕ್ಕೆ ಸಿಎಂ ಸೂಚನೆ

ಆಗಸ್ಟ್‌ ತಿಂಗಳಿನಿಂದ ಸರ್ವೆಯರ್‌ಗಳ ಲಭ್ಯತೆ ನೋಡಿಕೊಂಡು ಒತ್ತುವರಿ ತೆರವು ಮಾಡಲು ಕ್ರಮ ಕೈಗೊಳ್ಳಲಾಗುವುದು. ಇತರ ಇಲಾಖೆಯವರೂ ತಮ್ಮ ಜಮೀನು ಎಲ್ಲಿದೆ ಹಾಗೂ ಒತ್ತುವರಿಯಾಗಿದೆಯೇ ಎಂಬ ಕುರಿತು ಪರಿಶೀಲಿಸಲು ಅವಕಾಶವಿದೆ ಎಂದು ಕಂದಾಯ ಸಚಿವ ಕೃಷ್ಣ ಬೈರೇಗೌಡ ತಿಳಿಸಿದರು. ಈ ವೇಳೆ ಸಿಎಂ ಪ್ರತಿಕ್ರಿಯಿಸಿ, ವಿವಿಧ ಇಲಾಖೆಗಳ ಆಸ್ತಿ ರಕ್ಷಣೆಗೆ ಎಸ್ಟೇಟ್‌ ಅಧಿಕಾರಿಗಳನ್ನು ನೇಮಕ ಮಾಡಬೇಕು. ತಮ್ಮ ಇಲಾಖೆಗೆ ಹಂಚಿಕೆಯಾದ ಭೂಮಿಯ ಮಾಹಿತಿಯನ್ನು ಆರ್.ಟಿ.ಸಿ.ಯಲ್ಲಿ ಇಂದೀಕರಣ ಮಾಡಬೇಕು. ಹಾಗೂ ಒತ್ತುವರಿ ತೆರವುಗೊಳಿಸಿ, ತಮ್ಮ ಆಸ್ತಿಯನ್ನು ಸಂರಕ್ಷಿಸಬೇಕು. ಸರ್ಕಾರಿ ಜಮೀನು ಒತ್ತುವರಿಯನ್ನು ನಿರ್ದಾಕ್ಷಿಣ್ಯವಾಗಿ ತೆರವುಗೊಳಿಸಬೇಕು ಎಂದು ಸೂಚಿಸಿದರು.

737 ಸರ್ವೆಯರ್‌ ಹುದ್ದೆಗಳ ನೇಮಕಕ್ಕೆ ಶೀಘ್ರ ಕ್ರಮ

ಪೋಡಿ ಮತ್ತು ದುರುಸ್ತಿ ಪ್ರಕರಣಗಳು ಬಹಳ ಸಂಖ್ಯೆಯಲ್ಲಿ ಬಾಕಿ ಇರುವುದರಿಂದ, ಅಭಿಯಾನ ಮಾದರಿಯಲ್ಲಿ ಪೂರ್ಣಗೊಳಿಸಬೇಕು. ಇದಕ್ಕೆ ಹೆಚ್ಚುವರಿ ಸರ್ವೆಯರ್‌ಗಳ ಅಗತ್ಯವಿದೆ. 737 ಹುದ್ದೆಗಳಿಗೆ ಅನುಮತಿ ದೊರೆತಿದ್ದು, ಶೀಘ್ರವೇ ನೇಮಕ ಮಾಡಿಕೊಳ್ಳಲು ಕ್ರಮ ವಹಿಸಲಾಗುವುದು ಎಂದು ಕಂದಾಯ ಸಚಿವ ಕೃಷ್ಣ ಬೈರೇಗೌಡ ತಿಳಿಸಿದರು.

ಭೂ ಸುರಕ್ಷಾ ಕಾರ್ಯಕ್ರಮದಡಿ ಎಲ್ಲ ದಾಖಲೆಗಳನ್ನು ಸ್ಕ್ಯಾನ್‌ ಮಾಡಿ, ಇಂಡೆಕ್ಸ್‌ ಮಾಡಿ ಡಿಜಿಟಲೀಕರಣ ಮಾಡಲಾಗಿದೆ. ಈ ವರೆಗೆ 3.28 ಕೋಟಿ ಪುಟಗಳನ್ನು ಸ್ಕ್ಯಾನ್‌ ಮಾಡಲಾಗಿದೆ. 31 ತಾಲೂಕಿನಲ್ಲಿ ಪ್ರಾಯೋಗಿಕವಾಗಿ ಕೈಗೆತ್ತಿಕೊಳ್ಳಲಾಗಿದ್ದು, ಆಗಸ್ಟ್‌ನಲ್ಲಿ ಎಲ್ಲ ತಾಲ್ಲೂಕುಗಳಲ್ಲಿ ಕೈಗೊಳ್ಳಲಾಗುವುದು. ಮುಂದಿನ ಒಂದು ವರ್ಷದೊಳಗೆ ದಾಖಲೆಗಳ ಡಿಜಿಟಲೀಕರಣ ಪ್ರಕ್ರಿಯೆ ಪೂರ್ಣಗೊಳಿಸಲಾಗುವುದು. ಇದರಿಂದ ಸಾರ್ವಜನಿಕರಿಗೆ ದಾಖಲೆಗಳನ್ನು ಒದಗಿಸುವುದರ ಜೊತೆಗೆ, ದಾಖಲೆಗಳ ತಿರುಚುವಿಕೆ, ದಾಖಲೆಗಳ ನಾಪತ್ತೆ ಮೊದಲಾದವುಗಳನ್ನು ತಡೆಯಬಹುದಾಗಿದೆ ಎಂದು ಹೇಳಿದರು.

ಇಂಧನ ಇಲಾಖೆ

ಇಂಧನ ಇಲಾಖೆಯಲ್ಲಿ ಒಟ್ಟು 217 ಪ್ರಕರಣಗಳಲ್ಲಿ ವಿವಿಧ ಅಭಿವೃದ್ಧಿ ಕಾಮಗಾರಿಗಳಿಗಾಗಿ ಜಮೀನು ಅಗತ್ಯವಿದ್ದು, ಜಿಲ್ಲಾಧಿಕಾರಿಗಳು ಜಮೀನು ಗುರುತಿಸಿ ಹಸ್ತಾಂತರಿಸಬೇಕು. ಸೌರ ಘಟಕಗಳನ್ನು ಅನುಷ್ಠಾನಗೊಳಿಸುವ ಪಿಎಂ ಕುಸುಮ್‌ ಯೋಜನೆಯಡಿ 170 ಕಾಮಗಾರಿಗಳಿಗೆ ಜಮೀನು ಒದಗಿಸಬೇಕಾಗಿದೆ. ಇದೇ ರೀತಿ ಕೆಪಿಸಿಎಲ್‌ 45 ಉಪ ಕೇಂದ್ರಗಳಿಗೆ ಜಮೀನು ಹಾಗೂ ಶರಾವತಿ ಕಣಿವೆಯಲ್ಲಿ 2ಸಾವಿರ ಮೆಗಾ ವ್ಯಾಟ್‌ ಸಾಮರ್ಥ್ಯದ ಪಂಪ್ಡ್‌ ಸ್ಟೋರೇಜ್‌ ವಿದ್ಯುತ್‌ ಯೋಜನೆ ಅನುಷ್ಟಾನಕ್ಕೆ 40 ಎಕ್ರೆ ಖಾಸಗಿ ಭೂಮಿಯನ್ನು ಭೂಸ್ವಾಧೀನ ಪಡಿಸಬೇಕಾಗಿದೆ ಎಂದು ಸಿಎಂ ತಿಳಿಸಿದರು.

ಇದನ್ನೂ ಓದಿ | Union Budget 2024: ಕೇಂದ್ರ ಬಜೆಟ್‌ನಲ್ಲಿ ಉದ್ಯೋಗ, ಗ್ರಾಮೀಣಾಭಿವೃದ್ಧಿಗೆ ಒತ್ತು-ಅರ್ಥಶಾಸ್ತ್ರಜ್ಞರು ಹೇಳೋದೇನು?

ಗಂಗಾ ಕಲ್ಯಾಣ ಯೋಜನೆಯಡಿ ವಿದ್ಯುತ್‌ ಸಂಪರ್ಕ ಕಲ್ಪಿಸಲು 4500 ಅರ್ಜಿ ಬಾಕಿಯಿದೆ. ಗಂಗಾ ಕಲ್ಯಾಣ ಯೋಜನೆಯಡಿ ವಿದ್ಯುತ್‌ ಸಂಪರ್ಕ ಕಲ್ಪಿಸಲು ವಿಳಂಬ ಮಾಡಬಾರದು. ಎಲ್ಲಾ ಫಲಾನುಭವಿ ಇಲಾಖೆಗಳ ನಡುವೆ ಸಮನ್ವಯದಿಂದ ಕಾರ್ಯನಿರ್ವಹಿಸಬೇಕು ಎಂದರು.

Continue Reading

ಕರ್ನಾಟಕ

Kannada New Movie: ಗಣೇಶ್‌ ವೃತ್ತಿಜೀವನದ ಬಿಗ್ ಬಜೆಟ್ ಚಿತ್ರ ʼಕೃಷ್ಣಂ ಪ್ರಣಯ ಸಖಿʼ

Kannada New Movie: “ಕೃಷ್ಣಂ ಪ್ರಣಯ ಸಖಿ” ಉತ್ತಮ ಕಥಾಹಂದರ ಹೊಂದಿರುವ ಚಿತ್ರ. ಕನ್ನಡ ಚಿತ್ರರಂಗದ ಹಿರಿಯ ನಟರೊಂದಿಗೆ ಈ ಚಿತ್ರದಲ್ಲಿ ನಟಿಸಿದ್ದು ಸಂತೋಷವಾಯಿತು. ನೋಡುಗರಿಗೂ ಈ ಚಿತ್ರ ಇಷ್ಟವಾಗುತ್ತದೆ. ಅಂತಹ ಉತ್ತಮ ಚಿತ್ರ ಮಾಡಿದ್ದಾರೆ ಶ್ರೀನಿವಾಸರಾಜು. ಪ್ರಶಾಂತ್ ಅದ್ದೂರಿಯಾಗಿ ನಿರ್ಮಾಣ ಮಾಡಿದ್ದಾರೆ. “ಕೃಷ್ಣಂ ಪ್ರಣಯ ಸಖಿ” ನನ್ನ ಈವರೆಗಿನ ವೃತ್ತಿಜೀವನದ ಬಿಗ್ ಬಜೆಟ್‌ನ ಚಿತ್ರ. ಆಗಸ್ಟ್ 15 ರಂದು ನಮ್ಮ ಚಿತ್ರ ಬಿಡುಗಡೆಯಾಗುತ್ತಿದೆ. ನೋಡಿ ಪ್ರೋತ್ಸಾಹಿಸಿ ಎಂದು ಗೋಲ್ಡನ್ ಸ್ಟಾರ್ ಗಣೇಶ್ ತಿಳಿಸಿದ್ದಾರೆ.

VISTARANEWS.COM


on

Golden Star Ganesh starring Krishnam Pranaya Sakhi movie releasing on 15th August
Koo

ಬೆಂಗಳೂರು: ತ್ರಿಶೂಲ್ ಎಂಟರ್ಟೈನ್ಮೆಂಟ್ ಲಾಂಛನದಲ್ಲಿ ಪ್ರಶಾಂತ್ ಜಿ. ರುದ್ರಪ್ಪ ನಿರ್ಮಿಸಿರುವ, ಶ್ರೀನಿವಾಸರಾಜು ನಿರ್ದೇಶನದ ಹಾಗೂ ಗೋಲ್ಡನ್ ಸ್ಟಾರ್ ಗಣೇಶ್ ನಾಯಕರಾಗಿ ನಟಿಸಿರುವ “ಕೃಷ್ಣಂ ಪ್ರಣಯ ಸಖಿ” ಚಿತ್ರದ ಎರಡು ಹಾಡುಗಳು ಬಿಡುಗಡೆಯಾಗಿದ್ದು, ಎರಡೂ ಹಾಡುಗಳು ಪ್ರೇಕ್ಷಕರ ಮನ ಗೆದ್ದಿದೆ. ಬಹು ನಿರೀಕ್ಷಿತ ಈ ಚಿತ್ರ (Kannada New Movie) ಆಗಸ್ಟ್ 15ರಂದು ಬಿಡುಗಡೆಯಾಗಲಿದೆ.

ಚಿತ್ರದ ಕುರಿತು ಏರ್ಪಡಿಸಿದ್ದ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಗೋಲ್ಡನ್ ಸ್ಟಾರ್ ಗಣೇಶ್, “ದಂಡುಪಾಳ್ಯ” ಚಿತ್ರದ ನಿರ್ದೇಶಕ ಶ್ರೀನಿವಾಸರಾಜು ಅವರು ಚಿತ್ರದ ಕಥೆ ಹೇಳಲು ಬರುತ್ತಿದ್ದಾರೆ ಎಂದಾಗ, ಅವರು ನನ್ನ ಜಾನರ್ ಬದಲಾಯಿಸುವ ಕಥೆ ಮಾಡಿರಬಹುದು ಅಂದುಕೊಂಡೆ. ಆದರೆ ಆರಂಭದಲ್ಲೇ ಅವರು ಎಂಟು ನಾಯಕಿಯರು ಎಂದಾಗ,‌ ಓ ಇದು ನನ್ನ ಜಾನರ್ ನ ಚಿತ್ರ ಅನಿಸಿತು ಎಂದರು.

“ಕೃಷ್ಣಂ ಪ್ರಣಯ ಸಖಿ” ಉತ್ತಮ ಕಥಾಹಂದರ ಹೊಂದಿರುವ ಚಿತ್ರ. ಕನ್ನಡ ಚಿತ್ರರಂಗದ ಹಿರಿಯ ನಟರೊಂದಿಗೆ ಈ ಚಿತ್ರದಲ್ಲಿ ನಟಿಸಿದ್ದು ಸಂತೋಷವಾಯಿತು. ನೋಡುಗರಿಗೂ ಈ ಚಿತ್ರ ಇಷ್ಟವಾಗುತ್ತದೆ. ಅಂತಹ ಉತ್ತಮ ಚಿತ್ರ ಮಾಡಿದ್ದಾರೆ ಶ್ರೀನಿವಾಸರಾಜು. ಪ್ರಶಾಂತ್ ಅದ್ದೂರಿಯಾಗಿ ನಿರ್ಮಾಣ ಮಾಡಿದ್ದಾರೆ . “ಕೃಷ್ಣಂ ಪ್ರಣಯ ಸಖಿ” ನನ್ನ ಈವರೆಗಿನ ವೃತ್ತಿಜೀವನದ ಬಿಗ್ ಬಜೆಟ್‌ನ ಚಿತ್ರ. ಆಗಸ್ಟ್ 15 ರಂದು ನಮ್ಮ ಚಿತ್ರ ಬಿಡುಗಡೆಯಾಗುತ್ತಿದೆ. ನೋಡಿ ಪ್ರೋತ್ಸಾಹಿಸಿ ಎಂದು ಗೋಲ್ಡನ್ ಸ್ಟಾರ್ ಗಣೇಶ್ ತಿಳಿಸಿದರು.

ಚಿತ್ರದ ನಿರ್ದೇಶಕ ಶ್ರೀನಿವಾಸರಾಜು ಮಾತನಾಡಿ, ಇದು ಗಣೇಶ್ ಅವರಿಗೆ ಸೂಕ್ತವಾದ ಕಥೆ. ಅವರ ಹಾಗೂ ಚಿತ್ರದಲ್ಲಿ ನಟಿಸಿರುವ ಎಲ್ಲಾ ಕಲಾವಿದರ ಅಭಿನಯ ಉತ್ತಮವಾಗಿ ಮೂಡಿಬಂದಿದೆ. ತಂತ್ರಜ್ಞರ ಕಾರ್ಯವೈಖರಿ ಕೂಡ ಚೆನ್ನಾಗಿದೆ. ಅರ್ಜುನ್ ಜನ್ಯ ಸಂಗೀತ ನೀಡಿರುವ ಆರು ಹಾಡುಗಳು ಈ ಚಿತ್ರದಲ್ಲಿದ್ದು, ಎರಡು ಹಾಡುಗಳು ಈಗಾಗಲೇ ಆನಂದ್ ಆಡಿಯೋ ಮೂಲಕ ಬಿಡುಗಡೆಯಾಗಿದೆ. ಇತ್ತೀಚಿಗೆ ಬಿಡುಗಡೆಯಾದ “ಚಿನ್ನಮ್ಮ” ಹಾಡಂತೂ ಈಗಾಗಲೇ ಅಧಿಕ ಸಂಖ್ಯೆಯಲ್ಲಿ ವೀಕ್ಷಣೆಯಾಗಿದೆ. ಆಗಸ್ಟ್ 15, ನಮ್ಮ ಚಿತ್ರ ತೆರೆ ಕಾಣಲಿದೆ. ನೋಡಿ ಹಾರೈಸಿ ಎಂದು ತಿಳಿಸಿದರು.

ಇದನ್ನೂ ಓದಿ: Paris 2024 Olympics Athletics: ವಿಶ್ವ ರ್‍ಯಾಂಕಿಂಗ್‌ ಆಧಾರದಲ್ಲಿ ಒಲಿಂಪಿಕ್ಸ್‌ಗೆ ಅರ್ಹತೆ ಪಡೆದ ಜೆಸ್ವಿನ್‌, ಅಂಕಿತಾ ಧ್ಯಾನಿ

ಚಿತ್ರ ಉತ್ತಮವಾಗಿ ಮೂಡಿಬಂದಿರುವುದಕ್ಕೆ ನಿರ್ಮಾಪಕರ ಪುತ್ರಿ ಪ್ರೇರಣಾ ಪ್ರಶಾಂತ್ ಧನ್ಯವಾದ ತಿಳಿಸಿದರು. ನಾಯಕಿಯರಾದ ಮಾಳವಿಕಾ ನಾಯರ್ ಹಾಗೂ ಶರಣ್ಯ ಶೆಟ್ಟಿ ತಮ್ಮ ಪಾತ್ರಗಳ ಬಗ್ಗೆ ಮಾಹಿತಿ ನೀಡಿದರು. ಹಿರಿಯ ನಟರಾದ ಶ್ರೀನಿವಾಸಮೂರ್ತಿ, ಸಾಧುಕೋಕಿಲ, ರಂಗಾಯಣ ರಘು, ಶಿವಧ್ವಜ್, ಗಿರಿ ಹಾಗೂ ಇತರರು “ಕೃಷ್ಣಂ ಪ್ರಣಯ ಸಖಿ” ಚಿತ್ರದ ಕುರಿತು ಮಾತನಾಡಿದರು.

Continue Reading
Advertisement
Union Budget 2024
ದೇಶ9 mins ago

Union Budget 2024: ಕೇಂದ್ರ ಬಜೆಟ್;‌ 8ನೇ ವೇತನ ಆಯೋಗ ಸೇರಿ 7 ಬೇಡಿಕೆ ಇಟ್ಟ ಸರ್ಕಾರಿ ನೌಕರರು!

Dengue Cases
ಕರ್ನಾಟಕ16 mins ago

Dengue Cases: ರಾಜ್ಯದಲ್ಲಿ ಸೋಮವಾರ 197 ಡೆಂಗ್ಯೂ ಕೇಸ್‌ಗಳು ಪತ್ತೆ, ಒಬ್ಬರ ಸಾವು

ಕ್ರೀಡೆ21 mins ago

Kuldeep Yadav: ಕುಲ್​ದೀಪ್ ಯಾದವ್​ರನ್ನು​ ಅಭಿನಂದಿಸಿದ ಯೋಗಿ ಆದಿತ್ಯನಾಥ್

Channappa Gowda Mosambi elected as new District President of Akhila bharata Veerashaiva Mahasabha
ಯಾದಗಿರಿ44 mins ago

Yadgiri News: ಅಖಿಲ ಭಾರತ ವೀರಶೈವ ಮಹಾಸಭಾ ನೂತನ ಜಿಲ್ಲಾಧ್ಯಕ್ಷರಾಗಿ ಚನ್ನಪ್ಪಗೌಡ ಮೋಸಂಬಿ ಅವಿರೋಧ ಆಯ್ಕೆ

Maharashtra Rain
Latest45 mins ago

Maharashtra Rain: ಮಹಾರಾಷ್ಟ್ರದಲ್ಲಿ ವರುಣನ ಅಬ್ಬರ; ರಾಯಗಢ ಕೋಟೆಯಲ್ಲಿ ಪ್ರವಾಸಿಗರಿಗೆ ಪ್ರಾಣ ಸಂಕಟ; ವಿಡಿಯೊ ನೋಡಿ

Money Guide
ಮನಿ-ಗೈಡ್54 mins ago

Money Guide: ಕಡಿಮೆ ಅವಧಿಯಲ್ಲಿ 1 ಕೋಟಿ ರೂ. ಗಳಿಸುವುದು ಹೇಗೆ? ಇಲ್ಲಿದೆ ಹೂಡಿಕೆಯ ಲೆಕ್ಕಾಚಾರ

land fraud
ಕರ್ನಾಟಕ57 mins ago

land fraud: ಭೂ ವಂಚನೆ ತಡೆಗೆ ಪಹಣಿ-ಆಧಾರ್‌ ಜೋಡಣೆ ಪ್ರಕ್ರಿಯೆ ಶೀಘ್ರ ಪೂರ್ಣಗೊಳಿಸಿ: ಸಿಎಂ ಸಿದ್ದರಾಮಯ್ಯ

Golden Star Ganesh starring Krishnam Pranaya Sakhi movie releasing on 15th August
ಕರ್ನಾಟಕ1 hour ago

Kannada New Movie: ಗಣೇಶ್‌ ವೃತ್ತಿಜೀವನದ ಬಿಗ್ ಬಜೆಟ್ ಚಿತ್ರ ʼಕೃಷ್ಣಂ ಪ್ರಣಯ ಸಖಿʼ

Heavy rain in coastal areas of Uttara Kannada district
ಉತ್ತರ ಕನ್ನಡ1 hour ago

Uttara Kannada News: ಕರಾವಳಿ ಭಾಗದಲ್ಲಿ ವ್ಯಾಪಕ ಮಳೆ, 12 ಕಾಳಜಿ ಕೇಂದ್ರಗಳಲ್ಲಿ 437 ಜನರಿಗೆ ಆಸರೆ

Sri Kyatha Lingeshwara Swamy new temple Inauguration on 13th August
ತುಮಕೂರು1 hour ago

Shira News: ಆ.13ರಂದು ಶ್ರೀ ಕ್ಯಾತಲಿಂಗೇಶ್ವರ ಸ್ವಾಮಿ ನೂತನ ದೇವಾಲಯದ ಜೀರ್ಣೋದ್ಧಾರ ಸಮಾರಂಭ

Sharmitha Gowda in bikini
ಕಿರುತೆರೆ9 months ago

Geetha Serial Kannada: ನಿದ್ದೆ ಕದ್ದ ಚೋರಿ! ನಟಿ `ಭಾನುಮತಿ’ ಹಾಟ್‌ ಪೋಟೊಗಳಿಗೆ ಫ್ಯಾನ್ಸ್ ಫುಲ್ ಫಿದಾ

Kannada Serials
ಕಿರುತೆರೆ9 months ago

Kannada Serials TRP: 2ನೇ ಸ್ಥಾನದಲ್ಲಿ 2 ಧಾರಾವಾಹಿಗಳು; ಟಿಆರ್‌ಪಿ ರೇಸ್‌ನಲ್ಲಿಲ್ಲ ಭಾಗ್ಯಲಕ್ಷ್ಮೀ!

Bigg Boss- Saregamapa 20 average TRP
ಕಿರುತೆರೆ9 months ago

Kannada Serials TRP: ಏಳನೇ ಸ್ಥಾನಕ್ಕೆ ʻಅಮೃತಧಾರೆʼ ಕುಸಿತ; ಬಿಗ್‌ ಬಾಸ್‌-ಸರಿಗಮಪ ಟಿಆರ್‌ಪಿ ಎಷ್ಟು?

galipata neetu
ಕಿರುತೆರೆ7 months ago

Kanyadana Serial: ಕಿರುತೆರೆಗೆ ಮತ್ತೆ ಎಂಟ್ರಿ ಕೊಟ್ಟ ʻಗಾಳಿಪಟʼ ಖ್ಯಾತಿಯ ʻನೀತುʼ!

Kannada Serials
ಕಿರುತೆರೆ9 months ago

Kannada Serials TRP: ನಾಲ್ಕನೇ ಸ್ಥಾನಕ್ಕೆ ಕುಸಿತ ಕಂಡ ʻಸೀತಾ ರಾಮʼ; ಟಿಆರ್‌ಪಿ ರೇಸ್‌ಗೆ ʻಭಾಗ್ಯಲಕ್ಷ್ಮಿʼ ಬ್ಯಾಕ್‌!

Kannada Serials
ಕಿರುತೆರೆ9 months ago

Kannada Serials TRP: ಟಿಆರ್‌ಪಿಯಲ್ಲಿ ʻಭಾಗ್ಯಲಕ್ಷ್ಮೀʼ ಹವಾ; ʻಪುಟ್ಟಕ್ಕನ ಮಕ್ಕಳುʼ ಧಾರಾವಾಹಿಗೆ ಸಂಕಷ್ಟ!

Bigg Boss' dominates TRP; Sita Rama fell to the sixth position
ಕಿರುತೆರೆ9 months ago

Kannada Serials TRP: ಟಿಆರ್‌ಪಿಯಲ್ಲಿ ʻಬಿಗ್ ಬಾಸ್ʼದೇ ಮೇಲುಗೈ; 6ನೇ ಸ್ಥಾನಕ್ಕೆ ಕುಸಿದ ʻಸೀತಾ ರಾಮʼ

geetha serial Dhanush gowda engagement
ಕಿರುತೆರೆ7 months ago

Dhanush Gowda: ಗೀತಾ ಧಾರಾವಾಹಿ ನಟನ ನಿಶ್ಚಿತಾರ್ಥ; ಭವ್ಯಾಳ ಕಮೆಂಟ್‌ ಬಾಕ್ಸ್‌ ಆಫ್‌!

varun
ಕಿರುತೆರೆ8 months ago

Brindavana Serial: ʼಬೃಂದಾವನʼ ಧಾರಾವಾಹಿಯಲ್ಲಿ ದೊಡ್ಡ ಟ್ವಿಸ್ಟ್‌; ಪ್ರಮುಖ ಪಾತ್ರಧಾರಿಯೇ ಬದಲು

Kannada Serials
ಕಿರುತೆರೆ10 months ago

Kannada Serials TRP: ಟಿಆರ್‌ಪಿಯಲ್ಲಿ ಏರಿಕೆ ಕಂಡ ʻಅಮೃತಧಾರೆʼ; ʻಗಟ್ಟಿಮೇಳʼಕ್ಕೆ ನಾಲ್ಕನೇ ಸ್ಥಾನ!

Rain Effect
ಮಳೆ4 hours ago

Rain Effect : ಭಾರಿ ಮಳೆಗೆ ನೀರಲ್ಲಿ ಕೊಚ್ಚಿ ಹೋದ ಪಾನ್‌ ಶಾಪ್‌, ಕಾರು! ಉಡುಪಿಯ ಶಾಲಾ-ಕಾಲೇಜುಗಳಿಗೆ ನಾಳೆಯೂ ರಜೆ

Karnataka Rain Effect
ಮಳೆ6 hours ago

Karnataka Rain : ಮಳೆ ಅವಾಂತರ; ಮರ ಬಿದ್ದು ಕಾರು ಜಖಂ, ಕುಸಿದು ಬಿದ್ದ ಪಾವಂಜೆ ಮಹಾಗಣಪತಿ ದೇವಸ್ಥಾನದ ತಡೆಗೋಡೆ

Karnataka Rain
ಮಳೆ8 hours ago

Karnataka Rain : ಭಾರಿ ಮಳೆಗೆ ಉಕ್ಕಿ ಹರಿಯುತ್ತಿರುವ ಹಳ್ಳ; ಪ್ರಾಣದ ಹಂಗು ತೊರೆದು ಶಾಲೆಗೆ ಹೋಗಬೇಕು!

Karnataka weather Forecast
ಮಳೆ9 hours ago

Karnataka Rain : ರಕ್ಕಸ ಅಲೆಗಳ ಮಧ್ಯೆ ಈಜಲು ಹೋದ ಪ್ರವಾಸಿಗರಿಗೆ ಬಿತ್ತು ಬಿಸಿ ಬಿಸಿ ಕಜ್ಜಾಯ‌!

Murder case
ಬೆಂಗಳೂರು10 hours ago

Murder case : ಕುಡಿದ ಅಮಲಿನಲ್ಲಿ ಶುರುವಾದ ಜಗಳ ಯುವಕನ ಕೊಲೆಯಲ್ಲಿ ಅಂತ್ಯ

karnataka weather Forecast
ಮಳೆ1 day ago

Karnataka weather : ನಾಳೆ ಭಾರಿ ಮಳೆ ಎಚ್ಚರಿಕೆ; ಕರಾವಳಿಯ ಈ ಶಾಲಾ-ಕಾಲೇಜುಗಳಿಗೆ ರಜೆ

Davanagere news
ಮಳೆ1 day ago

Davanagere News : ಆ ಗ್ರಾಮಕ್ಕೆ ಕಾಲಿಡದ ವರುಣ! ಮಳೆಗಾಗಿ ಗ್ರಾಮಸ್ಥರಿಂದ ಕಂತೆ ಭಿಕ್ಷೆ

Karnataka Rain
ಮಳೆ1 day ago

Karnataka Rain : ವೀಕೆಂಡ್‌ನಲ್ಲಿ ಸಿಲಿಕಾನ್‌ ಸಿಟಿಯಲ್ಲಿ ಮಳೆ ಮೋಡಿ; ಮತ್ತೆ ಗುಡ್ಡ ಕುಸಿತ ಶುರು

karnataka weather Forecast
ಮಳೆ2 days ago

Karnataka Weather : ವೇಗವಾಗಿ ಬೀಸುವ ಗಾಳಿ ಜತೆಗೆ ಅಬ್ಬರಿಸಲಿದೆ ಮಳೆ; ಈ ಜಿಲ್ಲೆಗಳಿಗೆ ಎಚ್ಚರಿಕೆ

karnataka weather Forecast
ಮಳೆ2 days ago

Karnataka Weather : ಚಾರಣಪ್ರಿಯರಿಗೆ ಶಾಕ್‌; ಭಾರಿ ಮಳೆಯಿಂದಾಗಿ ಈ ಜಾಗಗಳಿಗೆ ಟ್ರೆಕ್ಕಿಂಗ್‌ ನಿಷೇಧ

ಟ್ರೆಂಡಿಂಗ್‌