ಸಿದ್ದರಾಮಯ್ಯ ಅಮೃತ ಮಹೋತ್ಸವ ಕಾಂಗ್ರೆಸಿಗರ ಕಾರ್ಯಕ್ರಮ, ಆದರೆ ಕಾಂಗ್ರೆಸ್‌ ಕಾರ್ಯಕ್ರಮ ಅಲ್ಲ - Vistara News

ಕರ್ನಾಟಕ

ಸಿದ್ದರಾಮಯ್ಯ ಅಮೃತ ಮಹೋತ್ಸವ ಕಾಂಗ್ರೆಸಿಗರ ಕಾರ್ಯಕ್ರಮ, ಆದರೆ ಕಾಂಗ್ರೆಸ್‌ ಕಾರ್ಯಕ್ರಮ ಅಲ್ಲ

ಪಕ್ಷದೊಳಗೆ ನಡೆಯುತ್ತಿರುವ ಕಾರ್ಯಕ್ರಮಕ್ಕೆ ಅಪಾರ್ಥ ಕಲ್ಪಿಸುವುದು ಬೇಡ. ಸಿದ್ದರಾಮೋತ್ಸವ ನಡೆದೇ ನಡೆಯುತ್ತದೆ ಎಂದು ಅಮೃತ ಮಹೋತ್ಸವ ಸಮಿತಿ ಅಧ್ಯಕ್ಷ ಕೆ.ಎನ್.ರಾಜಣ್ಣ ಹೇಳಿದ್ದಾರೆ.

VISTARANEWS.COM


on

siddaramaiah
ಮಾಜಿ ಸಿಎಂ ಸಿದ್ದರಾಮಯ್ಯ
ಮಹತ್ವದ, ಕುತೂಹಲಕರ ಸುದ್ದಿಗಾಗಿ ಫಾಲೊ ಮಾಡಿ
Koo

ಬೆಂಗಳೂರು: ಸಿದ್ದರಾಮಯ್ಯ ಅವರಿಗೆ 75 ವರ್ಷ ತುಂಬುತ್ತಿರುವ ಸಂದರ್ಭದಲ್ಲಿ ನಡೆಸುತ್ತಿರುವ ಸಿದ್ದರಾಮಯ್ಯ ಅಮೃತ ಮಹೋತ್ಸವ ಕಾರ್ಯಕ್ರಮವನ್ನು ಕಾಂಗ್ರೆಸಿಗರು ಸೇri ಮಾಡುತ್ತಿದ್ದೇವಾದರೂ ಇದು ಕಾಂಗ್ರೆಸ್‌ ಪಕ್ಷದ ಕಾರ್ಯಕ್ರಮ ಅಲ್ಲ ಎಂದು ಮಾಜಿ ಸಭಾಪತಿ ಬಿ.ಎಲ್‌. ಶಂಕರ್‌ ಹೇಳಿದ್ದಾರೆ.

ಸಿದ್ದರಾಮೋತ್ಸವ ಎಂದೇ ಈಗಾಗಲೆ ಪ್ರಸಿದ್ಧವಾಗಿರುವ, ದಾವಣಗೆರೆಯಲ್ಲಿ ಆಗಸ್ಟ್‌ 3 ರಂದು ನಡೆಯಲಿರುವ ಕಾರ್ಯಕ್ರಮದ ಸಂಚಾಲನ ಸಮಿತಿ ಆಯೋಜಿಸಿದ್ದ ಸುದ್ದಿಗೋಷ್ಠಿಯಲ್ಲಿ ಶಂಕರ್‌ ಮಾತನಾಡಿದರು.

ಈ ಕಾರ್ಯಕ್ರಮ ಆಯೋಜನೆ ಮಾಡಲು, ಸಿದ್ದರಾಮಯ್ಯಗೆ 75 ವರ್ಷ ಆಗಿರುವುದು ಒಂದು ನೆಪ. ಸಿದ್ದರಾಮೋತ್ಸವ ಎಂದು ನಾವು ಯಾರೂ ಹೆಸರು ಕೊಟ್ಟಿಲ್ಲ, ಆ ಹೆಸರಿನಿಂದ ಕಾರ್ಯಕ್ರಮ ಮಾಡುತ್ತಿಲ್ಲ. ಕಾಂಗ್ರೆಸಿಗರೇ ಈ ಕಾರ್ಯಕ್ರಮ ಮಾಡುತ್ತಿದ್ದರೂ ಕಾಂಗ್ರೆಸ್ ಪಕ್ಷದಿಂದ ಕಾರ್ಯಕ್ರಮ ಮಾಡುತ್ತಿಲ್ಲ.

ಈ ಕಾರ್ಯಕ್ರಮ ಯಾವುದೇ ವ್ಯಕ್ತಿಯನ್ನು ವೈಭವೀಕರಿಸಲು ಅಲ್ಲ, ಆ ವ್ಯಕ್ತಿ ಹಿಂದೆ ಇರುವ ವಿಚಾರಗಳನ್ನು ಬಿಂಬಿಸಲು. ಈ ಕಾರ್ಯಕ್ರಮವು ಮುಂದಿನ ದಿನಗಳಲ್ಲಿ ರಾಜ್ಯ ರಾಜಕಾರಣದ ದಿಕ್ಕು ದೆಸೆ ಬದಲಿಸಲಿದೆ ಎಂದು ತಿಳಿಸಿದರು.

ಇದನ್ನೂ ಓದಿ | ಸಿದ್ದರಾಮೋತ್ಸವ ಕೇವಲ ಜನುಮ ದಿನ ಕಾರ್ಯಕ್ರಮವೆ? srlopcm75ನಲ್ಲಿದೆ ಈ ಒಗಟಿಗೆ ಉತ್ತರ!

ಅಮೃತಮಹೋತ್ಸವ ಸಮಿತಿ ಅಧ್ಯಕ್ಷ ಕೆ.ಎನ್.ರಾಜಣ್ಣ ಮಾತನಾಡಿ, ಮೊದಲು ಸಿದ್ದರಾಮಯ್ಯರವರು ಈ ಆಚರಣೆ ಅವಶ್ಯಕತೆ ಇಲ್ಲ ಎಂದಿದ್ದರು. ಬಳಿಕ ನಾವೆಲ್ಲರೂ ಮನವೊಲಿಸಿ ಕಾರ್ಯಕ್ರಮ ಆಯೋಜನೆ ಮಾಡಿದ್ದೇವೆ. ರಾಹುಲ್ ಗಾಂಧಿ ಕೂಡ ಈ ಕಾರ್ಯಕ್ರಮಕ್ಕೆ ಆಗಮಿಸುತ್ತಿದ್ದಾರೆ ಎಂದು ಮಾಹಿತಿ ನೀಡಿದರು.

ಸಿದ್ದರಾಮಯ್ಯ ನಡೆದು ಬಂದ ಹಾದಿ ಬಗ್ಗೆ ಹೊಸ ಪೀಳಿಗೆಗೆ ತಿಳಿಸಬೇಕು. ಅವರು ಸಿಎಂ ಆಗಿದ್ದಾಗ ಕೊಟ್ಟಿರುವ ಪ್ರತಿಯೊಂದು ಕಾರ್ಯಕ್ರಮಗಳಿಗೂ ಕಾರಣಗಳಿವೆ. ಅವರು ಅನುಭವಿಸಿದ ಕಷ್ಟವನ್ನು ಯೋಜನೆ ರೂಪದಲ್ಲಿ ತಂದು ಲಕ್ಷಾಂತರ ಮಂದಿಗೆ ಸಹಾಯ ಮಾಡಿದರು. ಈ ಕಾರ್ಯಕ್ರಮದ ಬಗ್ಗೆ ಯಾರೂ ಅನ್ಯಥಾ ಭಾವಿಸಬಾರದು. ಅಪಾರ್ಥ ಕಲ್ಪಿಸುವುದು ಬೇಡವೆಂದು ಕೆ.ಎನ್. ರಾಜಣ್ಣ ಮನವಿ ಮಾಡಿದರು.

ಸಮಿತಿ ಗೌರವ ಅಧ್ಯಕ್ಷ ಆರ್.ವಿ.ದೇಶಪಾಂಡೆ ಮಾತನಾಡಿ, ಸಿದ್ದರಾಮಯ್ಯ ಅವರಿಗೆ ವಿದ್ಯೆ ಸಂಪಾದನೆ ಮಾಡಲು ಕಷ್ಟವಿದ್ದ ಕಾಲದಲ್ಲಿ Bsc ಮಾಡಿ ನಂತರ ಲಾಯರ್ ಆದರು. ಲಾಯರ್ ಆದರೂ ಪ್ರ್ಯಾಕ್ಟಿಸ್ ಮಾಡಿದ್ದು ಕಡಿಮೆ, ಬಡವರಿಗಾಗಿ ಹೋರಾಟ ಮಾಡಲು ರಾಜಕೀಯಕ್ಕೆ ಬಂದರು. ರೈತ ಕುಟುಂಬದಿಂದ ಬಂದು ಕಷ್ಟಪಟ್ಟು ಸಾಧನೆ ಮಾಡಿದ್ದು, ಅವರನ್ನು ಅಭಿನಂದಿಸಲು ಅವರ ಅನುಮತಿ ಪಡೆದು ಕಾರ್ಯಕ್ರಮ ಮಾಡುತ್ತಿದ್ದೇವೆ ಎಂದರು.

ಕಾರ್ಯಕ್ರಮದ ಸಿದ್ಧತೆ ಕುರಿತು ಮಾಹಿತಿ ನೀಡಿದ ಮಾಜಿ ಸಚಿವ ಹಾಗೂ ಸಮಿತಿ ಮಹಾಪ್ರಧಾನ ಕಾರ್ಯದರ್ಶಿ ಬಸವರಾಜ್ ರಾಯರಡ್ಡಿ, ಸಿದ್ದರಾಮಯ್ಯ ಅವರಿಗೆ 75 ವರ್ಷ ತುಂಬಿದ ಕಾರಣಕ್ಕೆ ದಾವಣಗೆರೆಯಲ್ಲಿ ಈ ಕಾರ್ಯಕ್ರಮ ಆಯೋಜನೆ ಮಾಡಿದ್ದೇವೆ. ರಾಜ್ಯಾದ್ಯಂತ ಸಿದ್ದರಾಮಯ್ಯರಿಗೆ ಅಭಿಮಾನಿಗಳು ಇದ್ದು, ಎಲ್ಲರೂ ಬರಲು ಅನುಕೂಲವಂತೆ ಆಯೋಜನೆ ಮಾಡಿದ್ದೇವೆ ಎಂದರು. ಕಾರ್ಯಕ್ರಮದ ಇಮೇಲ್‌ ವಿಳಾಸದಲ್ಲಿ ಸಿಎಂ ಎಂದು ಇರುವುದರ ಕುರಿತು ಪ್ರತಿಕ್ರಿಯಿಸಿ, ಯಾಕಾಗಬಾರದು? ಸಿದ್ದರಾಮಯ್ಯ ಅವರು ಮುಖ್ಯಮಂತ್ರಿ ಆಗಲಿ ಎಂಬುದು ನಮ್ಮ ಅಭಿಲಾಷೆ ಎಂದರು.

ಇದನ್ನೂ ಓದಿ | ಸಿದ್ದರಾಮಯ್ಯ ʼಆಪ್ತʼರ ಲಿಸ್ಟ್‌ನಲ್ಲಿ ಡಿ.ಕೆ. ಶಿವಕುಮಾರ್‌‌ ಹೆಸರು ಇಲ್ಲ !

ಕ್ಷಣ ಕ್ಷಣದ ಮಾಹಿತಿಗಾಗಿ Vistara News FaceBook ಪೇಜ್ ಫಾಲೋ ಮಾಡಿ
ಮಹತ್ವದ ಮಾಹಿತಿಗಾಗಿ ವಿಸ್ತಾರ ನ್ಯೂಸ್ ಆ್ಯಪ್ ಉಚಿತವಾಗಿ ಡೌನ್ ಲೋಡ್ ಮಾಡಿಕೊಳ್ಳಿ: Andriod App | IOS App
Continue Reading
Click to comment

Leave a Reply

Your email address will not be published. Required fields are marked *

ಬೆಂಗಳೂರು

Electric shock : ಫ್ಯಾನ್‌ ಸ್ವಿಚ್‌ ಆನ್‌ ಮಾಡುವಾಗ ಕರೆಂಟ್‌ ಶಾಕ್‌; ವಿದ್ಯುತ್‌ ಕಂಬದಲ್ಲಿ ನೇತಾಡಿದ ಲೈನ್‌ಮ್ಯಾನ್‌ ಡೆಡ್‌ ಬಾಡಿ

Electric shock : ಕರೆಂಟ್‌ ಶಾಕ್‌ನಿಂದಾಗಿ ಪ್ರತ್ಯೇಕ ಕಡೆಗಳಲ್ಲಿ ಇಬ್ಬರು ಮೃತಪಟ್ಟಿದ್ದಾರೆ. ಬೆಂಗಳೂರಿನಲ್ಲಿ ಫ್ಯಾನ್‌ ಹಾಕಲು ಹೋದ ವ್ಯಕ್ತಿಗೆ ವಿದ್ಯುತ್‌ ಪ್ರವಹಿಸಿ ಮೃತಪಟ್ಟರೆ, ಚಿಕ್ಕಬಳ್ಳಾಪುರದಲ್ಲಿ ಕಂಬವೇರಿ ರಿಪೇರಿ ಕೆಲಸ ಮಾಡುತ್ತಿದ್ದ ಬೆಸ್ಕಾಂ ಲೈನ್‌ ಮ್ಯಾನ್‌ ದುರ್ಮರಣ ಹೊಂದಿದ್ದಾರೆ.

VISTARANEWS.COM


on

By

Electric shock
Koo

ಬೆಂಗಳೂರು/ಚಿಕ್ಕಬಳ್ಳಾಪುರ: ಕರೆಂಟ್ ಶಾಕ್ (Electric shock) ಹೊಡೆದು ವ್ಯಕ್ತಿಯೊಬ್ಬರು ದಾರುಣವಾಗಿ ಮೃತಪಟ್ಟಿದ್ದಾರೆ. ಬೆಂಗಳೂರಿನ ಕಾಡುಗೋಡಿ‌ ಪೊಲೀಸ್ ಠಾಣಾ ವ್ಯಾಪ್ತಿಯ ಕುಂಬೇನ ಅಗ್ರಹಾರದಲ್ಲಿ ನಡೆದಿದೆ. ಬಿಪುಲ್ ಕುಮಾರ್ (35) ಮೃತ ದುರ್ದೈವಿ.

ಟೈಲ್ಸ್ ಶೋ ರೂಂನಲ್ಲಿ ಕೆಲಸ‌ ಮಾಡುತ್ತಿದ್ದ ಬಿಪುಲ್, ಫ್ಯಾನ್ ಆನ್ ಮಾಡಲು ಹೋಗಿದ್ದಾನೆ. ಈ ವೇಳೆ ಕರೆಂಟ್ ಶಾಕ್ ಬಡಿದಿದ್ದು ಕುಸಿದು ಬಿದ್ದಿದ್ದಾನೆ. ಕೂಡಲೇ ಆತನನ್ನು ಆಸ್ಪತ್ರೆಗೆ ಕರೆದುಕೊಂಡು ಹೋಗಲಾಗಿದೆ. ಆದರೆ ಚಿಕಿತ್ಸೆ ಫಲಿಸದೇ ಬಿಪುಲ್‌ ಮೃತಪಟ್ಟಿದ್ದಾರೆ.

ಇದನ್ನೂ ಓದಿ: Road Accident : ಮುಖಾಮುಖಿಯಾಗಿ ಬಂದ ಕಾರುಗಳು ಪೀಸ್‌ ಪೀಸ್‌; ಚಾಲಕ ಸ್ಪಾಟ್‌ ಡೆತ್‌

ರಿಪೇರಿ ಮಾಡುವಾಗಲೇ ಪ್ರವಹಿಸಿದ ವಿದ್ಯುತ್‌; ಲೈನ್‌ಮ್ಯಾನ್‌ ಸಾವು

ಚಿಕ್ಕಬಳ್ಳಾಪುರದಲ್ಲಿ ಕಾರು ಅಪಘಾತದಲ್ಲಿ ಮೂವರು ಬೆಸ್ಕಾಂ ಸಿಬ್ಬಂದಿ ದುರ್ಮರಣ ಬೆನ್ನಲ್ಲೆ ಗೌರಿಬಿದನೂರಿನ ಬಿಸಲಹಳ್ಳಿ ಗ್ರಾಮದಲ್ಲಿ ಮೊತ್ತೊಬ್ಬ ಬೆಸ್ಕಾ ಸಿಬ್ಬಂದಿ ಪ್ರಾಣ ಕಳೆದುಕೊಂಡಿದ್ದಾರೆ. ದಾವಣಗೆರೆ ಮೂಲದ ಉದಯ್ ಕುಮಾರ್ (28 ) ಮೃತ ದುರ್ದೈವಿ.

ಟ್ರಾನ್ಸ್‌ಫಾರ್ಮರ್‌ ರಿಪೇರಿಗೆ ಹೋದ ಉದಯ್‌ಗೆ ವಿದ್ಯುತ್‌ ಪ್ರವಹಿಸಿದ್ದು ಕ್ಷಣ ಮಾತ್ರದಲ್ಲೇ ಒದ್ದಾಡಿ ಮೃತಪಟ್ಟಿದ್ದಾರೆ. ಇನ್ನೂ ಕಂಬದಲ್ಲೇ ಲೈನ್ ಮ್ಯಾನ್ ಮೃತದೇಹ ನೇತಾಡುತ್ತಿದ್ದು, ದುರ್ಘಟನೆ ಸಂಭವಿಸಿ ಒಂದು ಗಂಟೆ ಕಳೆದರೂ ಸ್ಥಳಕ್ಕೆ ಯಾವೊಬ್ಬ ಬೆಸ್ಕಾ ಅಧಿಕಾರಿಗಳು ಬಂದಿಲ್ಲ ಎಂದು ಸ್ಥಳೀಯರು ಆಕ್ರೋಶ ಹೊರಹಾಕಿದರು.

ತಡವಾಗಿ ಬಂದ ಅಧಿಕಾರಿಗಳಿಗೆ ತರಾಟೆ

ವಿದ್ಯುತ್ ದುರಸ್ಥಿ ವೇಳೆ ಲೈನ್ ಮ್ಯಾನ್‌ ಸಾವು ಪ್ರಕರಣಕ್ಕೆ ಸಂಬಂಧಿಸಿದಂತೆ ಸ್ಥಳಕ್ಕ ತಡವಾಗಿ ಬಂದ ಬೆಸ್ಕಾ ಅಧಿಕಾರಿಗಳಿಗೆ ಸ್ಥಳೀಯರು ಹಿಗ್ಗಾಮುಗ್ಗಾ ತರಾಟೆ ತೆಗೆದುಕೊಂಡರು. ಬಳಿಕ ವಿದ್ಯುತ್‌ ಕಂಬದಲ್ಲಿದ್ದ ಮೃತದೇಹವನ್ನು ಕೆಳಗೆ ಇಳಿಸಲಾಗಿತ್ತು.

ಈ ಸಂಗತಿಯ ಕುರಿತು ನಿಮ್ಮ ಅನಿಸಿಕೆ ಏನು? ಕಾಮೆಂಟ್ ಮೂಲಕ ತಿಳಿಸಿ

Continue Reading

ಕ್ರೈಂ

Road Accident : ಮುಖಾಮುಖಿಯಾಗಿ ಬಂದ ಕಾರುಗಳು ಪೀಸ್‌ ಪೀಸ್‌; ಚಾಲಕ ಸ್ಪಾಟ್‌ ಡೆತ್‌

Road Accident : ಪ್ರತ್ಯೇಕ ಕಡೆಗಳಲ್ಲಿ ಅಪಘಾತ ಸಂಭವಿಸಿದ್ದು ಸಾವು-ನೋವಿಗೆ ಕಾರಣವಾಗಿದೆ. ಶಿವಮೊಗ್ಗದಲ್ಲಿ ಕಾರುಗಳ ಮುಖಾಮುಖಿ ಡಿಕ್ಕಿಗೆ ಚಾಲಕ ಪ್ರಾಣ ಬಿಟ್ಟರೆ, ಉಡುಪಿಯಲ್ಲಿ ಕೆಟ್ಟು ನಿಂತಿದ್ದ ಲಾರಿಗೆ ಗೂಡ್ಸ್‌ ಗಾಡಿ ಗುದ್ದಿದೆ. ಚಿಕ್ಕಮಗಳೂರಲ್ಲಿ ಕಾರೊಂದು ಹೊತ್ತಿ ಉರಿದಿದೆ. ಉಡುಪಿಯಲ್ಲಿ ನಿಯಂತ್ರಣ ತಪ್ಪಿದ ಆಯಿಲ್‌ ಟ್ಯಾಂಕರ್‌ ಪಲ್ಟಿಯಾಗಿದೆ.

VISTARANEWS.COM


on

By

Road Accident in shivamogga
Koo

ಶಿವಮೊಗ್ಗ : ಎರಡು ಕಾರುಗಳ ನಡುವೆ ಮುಖಾಮುಖಿ ಡಿಕ್ಕಿಯಾಗಿದ್ದು, ಭೀಕರ ಅಪಘಾತ (Road Accident ) ಸಂಭವಿಸಿದೆ. ಮಾರುತಿ ಓಮ್ನಿ ಹಾಗೂ ಇಂಡಿಕಾ ಕಾರು ನಡುವೆ ಡಿಕ್ಕಿಯ ರಭಸಕ್ಕೆ ಓಮ್ನಿ ಕಾರು ಚಾಲಕ ಸ್ಥಳದಲ್ಲೇ ಮೃತಪಟ್ಟಿದ್ದಾನೆ. ಅಜೇಯ (21) ಮೃತ ದುರ್ದೈವಿ.

ಶಿವಮೊಗ್ಗ ಜಿಲ್ಲೆಯ ಸಾಗರ ತಾಲೂಕಿನ ಮಂಚಾಲೆ ಗ್ರಾಮದ ಬಳಿ ಅಪಘಾತ ನಡೆದಿದೆ. ಓಮ್ನಿ ಕಾರು ಜೋಗದಿಂದ ಶಿವಮೊಗ್ಗ ಕಡೆ ಹೊರಟಿತ್ತು. ಇಂಡಿಕಾ ಕಾರು ಆನಂದಪುರದಿಂದ ಸಾಗರ ಕಡೆಗೆ ತೆರಳುತ್ತಿದ್ದ ಅಪಘಾತ ಸಂಭವಿಸಿದೆ. ಅಪಘಾತದಲ್ಲಿ ಇಂಡಿಕಾ ಕಾರು ಚಾಲಕ ಹಾಗೂ ಮಾರುತಿ ಓಮ್ನಿಯಲ್ಲಿದ್ದ ಯುವಕನಿಗೆ ಗಾಯವಾಗಿದೆ.

ಗಾಯಾಳುಗಳನ್ನು ಸ್ಥಳೀಯ ಆಸ್ಪತ್ರೆಗೆ ರವಾನೆ ಮಾಡಲಾಗಿದೆ. ಸ್ಥಳಕ್ಕೆ ಆನಂದಪುರ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಚೆಲ್ಲಾಪಿಲ್ಲಿಯಾಗಿದ್ದ ಬಿದ್ದಿದ್ದ ಕಾರುಗಳನ್ನು ತೆರವು ಮಾಡಿದ್ದಾರೆ. ಆನಂದಪುರ ಪೊಲೀಸ್‌ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಉಡುಪಿಯಲ್ಲಿ ಕೆಟ್ಟು ನಿಂತಿದ್ದ ಲಾರಿಗೆ ಗೂಡ್ಸ್‌ ಲಾರಿ ಡಿಕ್ಕಿ

ಕೆಟ್ಟು ನಿಂತಿದ್ದ ಲಾರಿಗೆ ಹಿಂದಿನಿಂದ ಬಂದ ಗೂಡ್ಸ್‌ ಲಾರಿಯೊಂದು ಡಿಕ್ಕಿ ಹೊಡೆದಿದೆ. ಉಡುಪಿಯ ರಾಷ್ಟ್ರೀಯ ಹೆದ್ದಾರಿ 66 ಉದ್ಯಾವನದಲ್ಲಿ ಘಟನೆ ನಡೆದಿದೆ. ಅಪಘಾತದಲ್ಲಿ ಲಾರಿ ಚಾಲಕನಿಗೆ ಗಂಭೀರ ಗಾಯವಾಗಿದೆ.

ಲಾರಿಯು ತಾಂತ್ರಿಕ ಸಮಸ್ಯೆಯಿಂದ ರಾಷ್ಟ್ರೀಯ ಹೆದ್ದಾರಿ ನಡುವೆಯೇ ಕೆಟ್ಟು ನಿಂತಿತ್ತು. ಇದನ್ನೂ ಗಮನಿಸಿದ ಗೂಡ್ಸ್‌ ಚಾಲಕ ವೇಗವಾಗಿ ಬಂದಿದ್ದಾನೆ. ಈ ವೇಳೆ ಅಪಘಾತ ಸಂಭವಿಸಿದೆ. ಉಡುಪಿಯ ಕಾಪು ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ. ಕಾಪು ಪೊಲೀಸ್‌ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಇದನ್ನೂ ಓದಿ:Fire Accident: ಹಾವೇರಿಯಲ್ಲಿ ಧಗಧಗಿಸಿದ ಬೆಂಕಿ; ಸುಟ್ಟು ಭಸ್ಮವಾಯ್ತು 5 ಅಂಗಡಿ

ಉಡುಪಿಯಲ್ಲಿ ಆಯಿಲ್‌ ಟ್ಯಾಂಕರ್‌ ಪಲ್ಟಿ

ಉಡುಪಿಯ ಸಂತೆಕಟ್ಟೆ ಜಂಕ್ಷನ್‌ ರಾಷ್ಟ್ರೀಯ ಹೆದ್ದಾರಿ 66ರಲ್ಲಿ ಖಾದ್ಯ ತೈಲ ಸಾಗಣೆ ಮಾಡುತ್ತಿದ್ದ ಟ್ಯಾಂಕರ್ ಪಲ್ಟಿಯಾಗಿದೆ. ಉಡುಪಿಯಿಂದ ಕುಂದಾಪುರಕ್ಕೆ ತೆರಳುತ್ತಿದ್ದ ಆಯಿಲ್ ಟ್ಯಾಂಕರ್ ಕೆಸರು ರಸ್ತೆಯಲ್ಲಿ ನಿಯಂತ್ರಣ ತಪ್ಪಿ ಪಲ್ಟಿಯಾಗಿದೆ. ಚಾಲಕನಿಗೆ ತರಚಿದ ಗಾಯವಾಗಿದ್ದು, ಅಪಾಯದಿಂದ ಪಾರಾಗಿದ್ದಾರೆ. ಹೈವೇ ಕಾಮಗಾರಿ ಸೂಚನಾ ಫಲಕ ನೋಡದೆ ಮುಚ್ಚಿದ್ದ ಸರ್ವಿಸ್ ರಸ್ತೆಯಲ್ಲಿ ವಾಹನ ಚಲಾಯಿಸಿದ್ದೇ ಅಪಘಾತಕ್ಕೆ ಕಾರಣವಾಗಿದೆ.

ಶಾರ್ಟ್‌ ಸರ್ಕ್ಯೂಟ್‌ಗೆ ಹೊತ್ತಿ ಉರಿದ ಕಾರು

ಚಿಕ್ಕಮಗಳೂರಲ್ಲಿ ಶಾರ್ಟ್ ಸರ್ಕ್ಯೂಟ್‌ನಿಂದ ಕಾರೊಂದು ಹೊತ್ತಿ ಉರಿದಿದೆ. ಚಿಕ್ಕಮಗಳೂರಿಂದ ಹುಬ್ಬಳ್ಳಿಗೆ ಹೋಗುತ್ತಿದ್ದ ಸ್ಟಿಫ್ಟ್‌ ಕಾರೊಂದು ಕಡೂರು ತಾಲೂಕಿನ ಸರಸ್ವತಿಪುರ ಗೇಟ್ ಬಳಿ ಬಂದಾಗ ಬೆಂಕಿ ಕಾಣಿಸಿಕೊಂಡಿದೆ. ಕೂಡಲೇ ಕಾರಿನಲ್ಲಿದ್ದ ನಾಲ್ವರು ಕೆಳಗಿಳಿದು ಜೀವ ಉಳಿಸಿಕೊಂಡಿದ್ದಾರೆ. ನೋಡ ನೋಡುತ್ತಿದ್ದಂತೆ ಬೆಂಕಿಯ ಕೆನ್ನಾಲಿಗೆಗೆ ಸ್ವಿಫ್ಟ್ ಕಾರು ಸುಟ್ಟು ಹೋಗಿದೆ. ಕಡೂರು ಅಗ್ನಿಶಾಮಕ ಠಾಣೆಯ ಸಿಬ್ಬಂದಿ ಬೆಂಕಿ ನಂದಿಸಿದ್ದಾರೆ. ಕಡೂರು ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ.

ಈ ಸಂಗತಿಯ ಕುರಿತು ನಿಮ್ಮ ಅನಿಸಿಕೆ ಏನು? ಕಾಮೆಂಟ್ ಮೂಲಕ ತಿಳಿಸಿ

Continue Reading

ಕರ್ನಾಟಕ

ವಾಲ್ಮೀಕಿ ಅಭಿವೃದ್ಧಿ ನಿಗಮದಲ್ಲಿನ ಅಕ್ರಮ ಪ್ರಕರಣದಲ್ಲಿ ಸಚಿವ ಶರಣ ಪ್ರಕಾಶ್‌ ಪಾಟೀಲ್‌ ಹೆಸರು; ಡಾ. ಜಿ.ಪರಮೇಶ್ವರ್‌ ಹೇಳಿದ್ದೇನು?

Valmiki Corporation Scam: ವಾಲ್ಮೀಕಿ ಅಭಿವೃದ್ಧಿ ನಿಗಮದಲ್ಲಿನ ಅಕ್ರಮ ಪ್ರಕರಣ (Valmiki Corporation Scam)ದಲ್ಲಿ ಈಗಾಗಲೇ ರಾಜ್ಯ ಸರ್ಕಾರದ ಸಚಿವರೊಬ್ಬರ ತಲೆದಂಡವಾಗಿದೆ. ಇದೀಗ ಈ ಪ್ರಕರಣದಲ್ಲಿ ಸಚಿವ ಶರಣ ಪ್ರಕಾಶ್‌ ಪಾಟೀಲ್‌ ಹೆಸರೂ ಕೇಳಿ ಬರುತ್ತಿದೆ. ಅವರು ಸಾಕ್ಷ್ಯ ನಾಶಕ್ಕೆ ಪ್ರಯತ್ನಿಸಿದ್ದಾರೆ ಎನ್ನುವ ಆರೋಪ ಕೇಳಿ ಬರುತ್ತಿದೆ. ಈ ಹಿನ್ನೆಲೆಯಲ್ಲಿ ಗೃಹ ಸಚಿವ ಡಾ. ಜಿ.ಪರಮೇಶ್ವರ್‌ ಪ್ರತಿಕ್ರಿಸಿ, ಅದನ್ನು ಎಸ್‌ಐಟಿ ಅಧಿಕಾರಿಗಳು ತನಿಖೆ ನಡೆಸುತ್ತಾರೆ, ನಾವು ಅದರ ಬಗ್ಗೆ ವ್ಯಾಖ್ಯಾನ ಮಾಡೋದು ಸರಿಯಲ್ಲ ಎಂದು ಹೇಳಿದ್ದಾರೆ.

VISTARANEWS.COM


on

Valmiki Corporation Scam
Koo

ಬೆಂಗಳೂರು: ವಾಲ್ಮೀಕಿ ಅಭಿವೃದ್ಧಿ ನಿಗಮದಲ್ಲಿನ ಅಕ್ರಮ ಪ್ರಕರಣ (Valmiki Corporation Scam)ದಲ್ಲಿ ಈಗಾಗಲೇ ರಾಜ್ಯ ಸರ್ಕಾರದ ಸಚಿವರೊಬ್ಬರ ತಲೆದಂಡವಾಗಿದೆ. ಯುವಜನ ಸೇವಾ, ಕ್ರೀಡಾ ಮತ್ತು ಪರಿಶಿಷ್ಟ ಪಂಗಡಗಳ ಕಲ್ಯಾಣ ಸಚಿವ ಬಿ.ನಾಗೇಂದ್ರ (B Nagendra) ಗುರುವಾರ ರಾಜೀನಾಮೆ ನೀಡಿದ್ದಾರೆ. ಇದೀಗ ಈ ಪ್ರಕರಣದಲ್ಲಿ ಸಚಿವ ಶರಣ ಪ್ರಕಾಶ್‌ ಪಾಟೀಲ್‌ ಹೆಸರೂ ಕೇಳಿ ಬರುತ್ತಿದೆ. ಅವರು ಸಾಕ್ಷ್ಯ ನಾಶಕ್ಕೆ ಪ್ರಯತ್ನಿಸಿದ್ದಾರೆ ಎನ್ನುವ ಆರೋಪ ಕೇಳಿ ಬರುತ್ತಿದೆ. ಈ ಹಿನ್ನೆಲೆಯಲ್ಲಿ ಗೃಹ ಸಚಿವ ಡಾ. ಜಿ.ಪರಮೇಶ್ವರ್‌ ಪ್ರತಿಕ್ರಿಸಿ, ಅದನ್ನು ಎಸ್‌ಐಟಿ ಅಧಿಕಾರಿಗಳು ತನಿಖೆ ನಡೆಸುತ್ತಾರೆ, ನಾವು ಅದರ ಬಗ್ಗೆ ವ್ಯಾಖ್ಯಾನ ಮಾಡೋದು ಸರಿಯಲ್ಲ ಎಂದು ಹೇಳಿದ್ದಾರೆ.

ಸುದ್ದಿಗಾರರ ಜತೆ ಮಾತನಾಡಿದ ಪರಮೇಶ್ವರ್‌, ʼʼತನಿಖೆ ಮಾಡುವಾಗ ಯಾರು ಅಪರಾಧಿ ಸ್ಥಾನದಲ್ಲಿ ಇರ್ತಾರೆ ಅವರು ಹೇಳಿಕೆಗಳನ್ನು ಕೊಡುತ್ತಾರೆ. ಆ ಹೇಳಿಕೆಯಲ್ಲಿ ಹಲವರ ಹೆಸರು ಕೇಳಿ ಬರುತ್ತದೆ. ಈ ಬಗ್ಗೆ ಎಸ್‌ಐಟಿ ಅಧಿಕಾರಿಗಳು ತನಿಖೆ ನಡೆಸುತ್ತಾರೆ. ಶರಣ ಪ್ರಕಾಶ್‌ ಪಾಟೀಲ್‌ ರಾಜೀನಾಮೆಗೆ ಬಿಜೆಪಿಯವರು ಒತ್ತಾಯಿಸುತ್ತಿದ್ದಾರೆ. ಆದರೆ ಯಾರು ಏನೇ ಹೇಳಿದ್ರೂ ಅದನ್ನು ಪರಿಶೀಲಿಸಬೇಕಾಗುತ್ತದೆ. ನಾವು ಅದರ ಬಗ್ಗೆ ವ್ಯಾಖ್ಯಾನ ಮಾಡೋದು ಸರಿಯಲ್ಲ. ಜತೆಗೆ ಈಗಲೇ ಅದಕ್ಕೆ ಸಂಬಂಧಪಟ್ಟ ಹೇಳಿಕೆ ಕೊಡಲು ಆಗಲ್ಲ. ಅದನ್ನು ಎಸ್ಐಟಿ ಅಧಿಕಾರಿಗಳು ತನಿಖೆ ನಡೆಸುತ್ತಾರೆʼʼ ಎಂದು ತಿಳಿಸಿದ್ದಾರೆ.

ಬಸನಗೌಡ ದದ್ದಲ್‌ಗೂ ಸಂಕಷ್ಟ

ರಾಯಚೂರು: ವಾಲ್ಮೀಕಿ ಅಭಿವೃದ್ಧಿ ನಿಗಮದ 187 ಕೋಟಿ ರೂ. ಭ್ರಷ್ಟಾಚಾರ ಪ್ರಕರಣದಲ್ಲಿ ವಾಲ್ಮೀಕಿ ನಿಗಮದ ಅಧ್ಯಕ್ಷ ಬಸನಗೌಡ ದದ್ದಲ್ ಹೆಸರು ತಳಕು ಹಾಕಿಕೊಂಡಿದೆ. ನಾಗೇಂದ್ರ ಬೆನ್ನಲ್ಲೇ ಶಾಸಕ ಬಸನಗೌಡ ದದ್ದಲ್ ಅವರಿಗೂ ಸಂಕಷ್ಟ ಎದುರಾಗಿದೆ. ರಾಯಚೂರು ಗ್ರಾಮೀಣ ಕ್ಷೇತ್ರದ ಶಾಸಕರೂ ಆಗಿರುವ ಬಸನಗೌಡ ದದ್ದಲ್ ಅವರು ಆರೋಪಿ ನಂ 8ರ ಜತೆ ವಾಟ್ಸ್‌ಆ್ಯಪ್‌ ಚಾಟಿಂಗ್ ಮಾಡಿದ್ದಾರೆ ಎನ್ನುವ ವಿಚಾರ ಸಾಕಷ್ಟು ಚರ್ಚೆಯಾಗುತ್ತಿದೆ. ವಾಲ್ಮೀಕಿ ಅಭಿವೃದ್ಧಿ ನಿಗಮದ ಅಧ್ಯಕ್ಷರಾದ ಬಳಿಕ ಅವರು ವಾಟ್ಸ್‌ಆ್ಯಪ್‌ ಚಾಟಿಂಗ್ ನಡೆದಿದ್ದಾರೆ ಎನ್ನಲಾಗಿದೆ. ಈ ಬಗ್ಗೆ ನ್ಯಾಯಾಲಯಕ್ಕೆ ಸಲ್ಲಿಸಿದ 3 ಪುಟಗಳ ಹೇಳಿಕೆಯಲ್ಲಿ ಪ್ರಸ್ತಾವಿಸಲಾಗಿದೆ. ಈ ಬಗ್ಗೆ ತನಿಖೆ ನಡೆಸುವಂತೆಯೂ ಮನವಿ ಸಲ್ಲಿಸಲಾಗಿದೆ.

ರಾಜೀನಾಮೆಗೆ ಆಗ್ರಹ

ಈ ಬೆಳವಣಿಗೆ ಬೆನ್ನಲ್ಲೇ ಶಾಸಕ ಬಸನಗೌಡ ದದ್ದಲ್ ಅವರ ರಾಜೀನಾಮೆಗೆ ಆಗ್ರಹ ಕೇಳಿ ಬಂದಿದೆ. ರಾಯಚೂರು ಜಿಲ್ಲಾ ಜೆಡಿಎಸ್ ನಿಯೋಗದ ವರಿಷ್ಠರು ಎನ್.ಎಸ್.ಬೋಸರಾಜ್ ಮತ್ತು ಶಾಸಕ ಬಸನಗೌಡ ದದ್ದಲ್ ರಾಜೀನಾಮೆಗೆ ಆಗ್ರಹಿಸಿದ್ದಾರೆ. ಬಸನಗೌಡ ದದ್ದಲ ಭ್ರಷ್ಟಾಚಾರಕ್ಕೆ ಮೂಲ ಕಾರಣ. ಎಸ್‌ಐಟಿ ಹಾಗೂ ಸಿಬಿಐ ಎನ್.ಎಸ್. ಬೋಸರಾಜು ಹಾಗೂ ಬಸನಗೌಡ ದದ್ದಲ್ ವಿರುದ್ಧ ಕ್ರಿಮಿನಲ್ ಕೇಸ್ ದಾಖಲಿಸಬೇಕು. ಇಬ್ಬರನ್ನೂ ವಿಚಾರಣೆಗೆ ಒಳಪಡಿಸಬೇಕು ಮತ್ತು ಬಂಧಿಸಬೇಕು ಎಂದು ಜೆಡಿಎಸ್‌ ಒತ್ತಾಯಿಸಿದೆ.

ʼʼಪ್ರಕರಣ ದಾಖಲಾಗುತ್ತಿದ್ದಂತೆ ಕೆಲವರು ಹಣ ಹಿಂದಿರುಗಿಸಿದ್ದಾರೆ. ಹಣ ಹಿಂದಿರುಗಿಸುವಲ್ಲಿ ಶಾಸಕ ಬಸನಗೌಡ ದದ್ದಲ ಪಾತ್ರವಿದೆ. ಜೆಡಿಎಸ್ ನಿಯೋಗ ರಾಜ್ಯಪಾಲರನ್ನು ಭೇಟಿ ಮಾಡಿ ಮನವಿ ಪತ್ರ ಹಸ್ತಾಂತರಿಸಲಿದೆʼʼ ಎಂದು ರಾಯಚೂರಲ್ಲಿ ಜೆಡಿಎಸ್ ಜಿಲ್ಲಾಧ್ಯಕ್ಷ ಎಂ.ವಿರೂಪಾಕ್ಷಿ ತಿಳಿಸಿದ್ದಾರೆ.

ಇದನ್ನೂ ಓದಿ: Valmiki Corporation Scam: ಬಿ. ನಾಗೇಂದ್ರ ನೀಡಿದ ರಾಜೀನಾಮೆ ಅಂಗೀಕಾರ ಮಾಡಿದ ರಾಜ್ಯಪಾಲರು

Continue Reading

ಕೊಡಗು

Love‌ Torture : ಪ್ರೀತ್ಸೆ ಅಂತ ಪ್ರಾಣ ತಿಂದ; ಒಪ್ಪದೇ ಇದ್ದಾಗ ಯುವತಿಯ ಖಾಸಗಿ ಫೋಟೋ ಹರಿಬಿಟ್ಟ ಪಾಗಲ್‌ ಪ್ರೇಮಿ

Love‌ Torture : ಯುವತಿಯ ಖಾಸಗಿ ಫೋಟೋಗಳನ್ನು ಸೋಶಿಯಲ್‌ ಮೀಡಿಯಾದಲ್ಲಿ ಹರಿಬಿಟ್ಟು ಪ್ರೀತಿಸುವಂತೆ ಬ್ಲ್ಯಾಕ್‌ ಮೇಲ್‌ ಮಾಡುತ್ತಿದ್ದ ದುಷ್ಟ ಪ್ರೇಮಿಯನ್ನು ಪೊಲೀಸರು ಮುಂಬೈ ವಿಮಾನ ನಿಲ್ದಾಣದಲ್ಲಿ ಬಂಧಿಸಿದ್ದಾರೆ.

VISTARANEWS.COM


on

By

love Torture Man uploads private photo of young woman on social media
ಮುಂಬೈ ವಿಮಾನ ನಿಲ್ದಾಣದಲ್ಲಿ ಆರೋಪಿಯನ್ನು ಬಂಧಿಸಿದ ಸಿದ್ದಾಪುರ ಪೊಲೀಸರು
Koo

ಕೊಡಗು: ಅನ್ಯಕೋಮಿನ ಯುವತಿಯ ಖಾಸಗಿ ಫೋಟೋಗಳನ್ನು ಸಾಮಾಜಿಕ ಜಾಲತಾಣದಲ್ಲಿ ಹರಿಬಿಟ್ಟು ಪ್ರೀತಿಸುವಂತೆ (Love‌ Torture) ಒತ್ತಾಯಿಸಿದ್ದ ಪಾಗಲ್‌ ಪ್ರೇಮಿಯನ್ನು ಬಂಧಿಸುವಲ್ಲಿ ಸಿದ್ದಾಪುರ ಪೊಲೀಸರು ಯಶಸ್ವಿಯಾಗಿದ್ದಾರೆ.

ಕೊಡಗಿನ ನೆಲ್ಯಹುದಿಕೇರಿ ನಿವಾಸಿ ಅಶ್ರಪ್ ಎಂಬುವವರ ಪುತ್ರ ಅಫ್ರೀದ್ (21) ಎಂಬಾತ ಅದೇ ಗ್ರಾಮದ ಅನ್ಯಕೋಮಿನ ಯುವತಿಯನ್ನು ಪ್ರೀತಿಸುತ್ತಿದ್ದ. ಆದರೆ ಯುವತಿ ಅಫ್ರೀದ್‌ ಪ್ರೀತಿಯನ್ನು ನಿರಾಕರಿಸಿದ್ದಳು ಎನ್ನಲಾಗಿದೆ. ತನ್ನನ್ನು ಪ್ರೀತಿಸುವಂತೆ ಯುವತಿಯನ್ನು ಪೀಡಿಸುತ್ತಾ ಮಾನಸಿಕವಾಗಿ ಹಿಂಸೆ ನೀಡುತ್ತಿದ್ದ ಎನ್ನಲಾಗಿದೆ.

ಈ ನಡುವೆ ಅಫ್ರೀದ್‌ ಕಳೆದ ಆರು ತಿಂಗಳ ಹಿಂದೆ ಕೆಲಸದ ನಿಮಿತ್ತ ವಿದೇಶಕ್ಕೆ ತೆರಳಿದ್ದ. ವಿದೇಶದಿಂದಲೇ ತಾನು ಪ್ರೀತಿಸುತ್ತಿದ್ದ ಯುವತಿಯ ಖಾಸಗಿ ಚಿತ್ರವನ್ನು ಸಾಮಾಜಿಕ ಜಾಲತಾಣದಲ್ಲಿ ಹರಿಬಿಡುವುದಾಗಿ ಯುವತಿಯನ್ನು ಬೆದರಿಸಿದ್ದಾನೆ. ಆದರೆ ಆಫ್ರೀದ್‌ ಬೆದರಿಕೆಗೆ ಯುವತಿ ಬಗ್ಗದೇ ಇದ್ದಾಗ ಯುವತಿಯ ಖಾಸಗಿ ಚಿತ್ರಗಳನ್ನು‌ ಸಾಮಾಜಿಕ ಜಾಲತಾಣದಲ್ಲಿ ಹರಿಬಿಟ್ಟಿದ್ದಾನೆ.

ಇದನ್ನೂ ಓದಿ: Niveditha Gowda: ಚಂದನ್‌-ನಿವೇದಿತಾ ಡಿವೋರ್ಸ್‌ಗೆ ಸೃಜನ್ ಲೋಕೇಶ್ ಕಾರಣ? ಯಾಕೆ ಈ ಗಾಸಿಪ್‌?

ಈ ವಿಷಯ ತಿಳಿಯುತ್ತಿದ್ದಂತೆ ಈ ಕುರಿತು ಯುವತಿ ಕಳೆದ 2023ರ ಡಿಸೆಂಬರ್‌ನಲ್ಲೇ ಸಿದ್ದಾಪುರ ಪೊಲೀಸ್ ಠಾಣೆಯಲ್ಲಿ ದೂರು ನೀಡಿದ್ದಳು. ಯುವತಿ ನೀಡಿದ ದೂರಿನ‌‌ ಹಿನ್ನೆಲೆಯಲ್ಲಿ ಪ್ರಕರಣ ದಾಖಲಿಸಿಕೊಂಡ ಪೊಲೀಸರು ತನಿಖೆ ಪ್ರಾರಂಭಿಸಿದ್ದರು. ವಿದೇಶದಲ್ಲಿದ್ದು ಕೃತ್ಯವೆಸಗಿದ ಆರೋಪಿ ಅಫ್ರೀದಿಯನ್ನು ಆರು ತಿಂಗಳ ನಂತರ ಸಿದ್ದಾಪುರ ಪೊಲೀಸರು ಮುಂಬೈ ವಿಮಾನ‌ ನಿಲ್ದಾಣದಲ್ಲಿ ಬಂಧಿಸಿದ್ದಾರೆ.

ಆರೋಪಿಯ ವಿರುದ್ಧ ವಿವಿಧ ಪ್ರಕರಣಗಳು ದಾಖಲಾದ ಹಿನ್ನೆಲೆಯಲ್ಲಿ ತಲೆಮರೆಸಿಕೊಳ್ಳುವ ಯತ್ನದಲ್ಲಿದ್ದ. ಆರೋಪಿಯು ವಿದೇಶದಿಂದ ಬರುತ್ತಿರುವ ಖಚಿತ ಮಾಹಿತಿ ಮೇರೆಗೆ ತೆರಳಿದ ಸಿದ್ದಾಪುರ ಪೊಲೀಸರು ಆರೋಪಿಯನ್ನು ಮುಂಬೈ ವಿಮಾನ ನಿಲ್ದಾಣದಲ್ಲಿ ಬಂಧಿಸುವಲ್ಲಿ ಯಶಸ್ವಿಯಾಗಿದ್ದಾರೆ.

ವಿಮಾನ‌ ನಿಲ್ದಾಣದಲ್ಲೇ ಆತ್ಮ‌ಹತ್ಯೆಗೆ ಯತ್ನಿಸಿ ಹೈಡ್ರಾಮಾ

ವಿಮಾನ ನಿಲ್ದಾಣದಲ್ಲಿ ಪೊಲೀಸರು ಅರೆಸ್ಟ್‌ ಮಾಡಲು ಬಂದರೆ ಆಫ್ರೀದಿ ಆತ್ಮಹತ್ಯೆಗೆ ಯತ್ನಿಸಿದ್ದಾನೆ. ಯುವತಿಯ ಖಾಸಗಿ ಚಿತ್ರಗಳನ್ನು ಸಾಮಾಜಿಕ ಜಾಲತಾಣದಲ್ಲಿ ಹರಿಬಿಟ್ಟ ಆರೋಪದಲ್ಲಿ ಮುಂಬೈನಲ್ಲಿ ಬಂಧಿತನಾದ ಆರೋಪಿ ಅಫ್ರೀದಿ, ಪೊಲೀಸರ ಎದುರೇ ಚೂಪಾದ ವಸ್ತುವಿನಿಂದ ತನ್ನ ಕೈಗೆ ಗಾಯ ಮಾಡಿಕೊಂಡು ಆತ್ಮಹತ್ಯೆಗೆ ಯತ್ನಿಸಿದ್ದ. ಈ ಸಂಧರ್ಭದಲ್ಲಿ ಎಚ್ಚೆತ್ತುಕೊಂಡ ಮುಂಬಯಿ ಪೊಲೀಸರು ಹಾಗೂ ಸಿದ್ದಾಪುರ ಪೊಲೀಸರು ಆರೋಪಿಯನ್ನು ಆಸ್ಪತ್ರೆಗೆ ದಾಖಲಿಸಿ ಸೂಕ್ತ ಚಿಕಿತ್ಸೆ ಕೊಡಿಸಿ ಕರೆತಂದು ನ್ಯಾಯಾಂಗ ಬಂಧನಕ್ಕೆ ಒಳಪಡಿಸಿದ್ದಾರೆ. ಕೊಡಗು ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ರಾಮರಾಜನ್ ಮಾರ್ಗದರ್ಶನದೊಂದಿಗೆ ಮಡಿಕೇರಿ‌ ವೃತ್ತ ನಿರೀಕ್ಷ ರಾಜು ನೇತೃತ್ವದಲ್ಲಿ ನಡೆದ ಕಾರ್ಯಾಚರಣೆಯಲ್ಲಿ ಸಿದ್ದಾಪುರ ಠಾಣಾಧಿಕಾರಿ ರಾಘವೇಂದ್ರ ಹಾಗೂ ಸಿಬ್ಬಂದಿ ಬಸವರಾಜ್, ಕಿರಣ್ ಭಾಗಿಯಾಗಿದ್ದರು.

ಈ ಸಂಗತಿಯ ಕುರಿತು ನಿಮ್ಮ ಅನಿಸಿಕೆ ಏನು? ಕಾಮೆಂಟ್ ಮೂಲಕ ತಿಳಿಸಿ

Continue Reading
Advertisement
Viral News
ದೇಶ8 mins ago

Viral News: ಅಯ್ಯೋ..ಇದೆಂಥಾ ಹುಚ್ಚಾಟ! ಬಿಜೆಪಿ ಗೆಲ್ಲಲ್ಲಿ ಎಂದು ಬೆರಳನ್ನೇ ಕತ್ತರಿಸಿಕೊಂಡ ಭೂಪ

Chandan Shetty Dhruva Sarja Talk With Niveditha Gowda
ಸ್ಯಾಂಡಲ್ ವುಡ್24 mins ago

Chandan Shetty: ಚಂದನ್-ನಿವೇದಿತಾ ಸಂಬಂಧ ಸರಿ ಮಾಡ್ತಾರಾ ಧ್ರುವ ಸರ್ಜಾ? ಪ್ರಥಮ್ ಕೊಟ್ಟಿದ್ದಾರೆ ಕ್ಲೂ!

Electric shock
ಬೆಂಗಳೂರು25 mins ago

Electric shock : ಫ್ಯಾನ್‌ ಸ್ವಿಚ್‌ ಆನ್‌ ಮಾಡುವಾಗ ಕರೆಂಟ್‌ ಶಾಕ್‌; ವಿದ್ಯುತ್‌ ಕಂಬದಲ್ಲಿ ನೇತಾಡಿದ ಲೈನ್‌ಮ್ಯಾನ್‌ ಡೆಡ್‌ ಬಾಡಿ

Modi 3.0 Cabinet
Lok Sabha Election 202433 mins ago

Modi 3.0 Cabinet: ನರೇಂದ್ರ ಮೋದಿ ಕ್ಯಾಬಿನೆಟ್‌ನಲ್ಲಿ ಯಾರಿಗೆಲ್ಲ ಸಚಿವ ಸ್ಥಾನ? ಇವರೇ ನೋಡಿ ಸಂಭಾವ್ಯ ಮಿನಿಸ್ಟರ್‌ಗಳು

Kannada New Movie Ramesh Suresh Movie June 21st release
ಸ್ಯಾಂಡಲ್ ವುಡ್1 hour ago

Kannada New Movie: ʻರಮೇಶ್ ಸುರೇಶ್‌ʼ ಸಿನಿಮಾದಲ್ಲಿ ಇಬ್ಬರು ನಿರ್ದೇಶಕರು, ಇಬ್ಬರು ನಾಯಕರು ; ಜೂನ್ 21ರಂದು ತೆರೆಗೆ!

Road Accident in shivamogga
ಕ್ರೈಂ1 hour ago

Road Accident : ಮುಖಾಮುಖಿಯಾಗಿ ಬಂದ ಕಾರುಗಳು ಪೀಸ್‌ ಪೀಸ್‌; ಚಾಲಕ ಸ್ಪಾಟ್‌ ಡೆತ್‌

Rahul Gandhi
ದೇಶ1 hour ago

Rahul Gandhi: ಷೇರುಪೇಟೆಯಲ್ಲಿ ಭಾರಿ ಹಗರಣವಾಗಿದೆ ಎಂದಿದ್ದ ರಾಹುಲ್ ಗಾಂಧಿಗೆ ಐದೇ ದಿನದಲ್ಲಿ 25 ಲಕ್ಷ ರೂ. ಲಾಭ!

Raja Rani Show started Today onwards
ಕಿರುತೆರೆ1 hour ago

Raja Rani Show: ಇಂದಿನಿಂದ ʻರಾಜ ರಾಣಿ ರೀಲೋಡೆಡ್ʼ ರಿಯಾಲಿಟಿ ಶೋ ಶುರು!

Valmiki Corporation Scam
ಕರ್ನಾಟಕ2 hours ago

ವಾಲ್ಮೀಕಿ ಅಭಿವೃದ್ಧಿ ನಿಗಮದಲ್ಲಿನ ಅಕ್ರಮ ಪ್ರಕರಣದಲ್ಲಿ ಸಚಿವ ಶರಣ ಪ್ರಕಾಶ್‌ ಪಾಟೀಲ್‌ ಹೆಸರು; ಡಾ. ಜಿ.ಪರಮೇಶ್ವರ್‌ ಹೇಳಿದ್ದೇನು?

World Brain Tumor Day
ಆರೋಗ್ಯ2 hours ago

World Brain Tumor Day: ಇಂದು ವಿಶ್ವ ಬ್ರೇನ್‌ ಟ್ಯೂಮರ್‌ ದಿನ; ಮೊದಲೇ ಎಚ್ಚೆತ್ತುಕೊಂಡರೆ ಈ ಕಾಯಿಲೆಯಿಂದ ಪಾರಾಗಬಹುದು

Sharmitha Gowda in bikini
ಕಿರುತೆರೆ8 months ago

Geetha Serial Kannada: ನಿದ್ದೆ ಕದ್ದ ಚೋರಿ! ನಟಿ `ಭಾನುಮತಿ’ ಹಾಟ್‌ ಪೋಟೊಗಳಿಗೆ ಫ್ಯಾನ್ಸ್ ಫುಲ್ ಫಿದಾ

Kannada Serials
ಕಿರುತೆರೆ8 months ago

Kannada Serials TRP: 2ನೇ ಸ್ಥಾನದಲ್ಲಿ 2 ಧಾರಾವಾಹಿಗಳು; ಟಿಆರ್‌ಪಿ ರೇಸ್‌ನಲ್ಲಿಲ್ಲ ಭಾಗ್ಯಲಕ್ಷ್ಮೀ!

Bigg Boss- Saregamapa 20 average TRP
ಕಿರುತೆರೆ8 months ago

Kannada Serials TRP: ಏಳನೇ ಸ್ಥಾನಕ್ಕೆ ʻಅಮೃತಧಾರೆʼ ಕುಸಿತ; ಬಿಗ್‌ ಬಾಸ್‌-ಸರಿಗಮಪ ಟಿಆರ್‌ಪಿ ಎಷ್ಟು?

galipata neetu
ಕಿರುತೆರೆ6 months ago

Kanyadana Serial: ಕಿರುತೆರೆಗೆ ಮತ್ತೆ ಎಂಟ್ರಿ ಕೊಟ್ಟ ʻಗಾಳಿಪಟʼ ಖ್ಯಾತಿಯ ʻನೀತುʼ!

Kannada Serials
ಕಿರುತೆರೆ8 months ago

Kannada Serials TRP: ನಾಲ್ಕನೇ ಸ್ಥಾನಕ್ಕೆ ಕುಸಿತ ಕಂಡ ʻಸೀತಾ ರಾಮʼ; ಟಿಆರ್‌ಪಿ ರೇಸ್‌ಗೆ ʻಭಾಗ್ಯಲಕ್ಷ್ಮಿʼ ಬ್ಯಾಕ್‌!

Kannada Serials
ಕಿರುತೆರೆ8 months ago

Kannada Serials TRP: ಟಿಆರ್‌ಪಿಯಲ್ಲಿ ʻಭಾಗ್ಯಲಕ್ಷ್ಮೀʼ ಹವಾ; ʻಪುಟ್ಟಕ್ಕನ ಮಕ್ಕಳುʼ ಧಾರಾವಾಹಿಗೆ ಸಂಕಷ್ಟ!

Bigg Boss' dominates TRP; Sita Rama fell to the sixth position
ಕಿರುತೆರೆ7 months ago

Kannada Serials TRP: ಟಿಆರ್‌ಪಿಯಲ್ಲಿ ʻಬಿಗ್ ಬಾಸ್ʼದೇ ಮೇಲುಗೈ; 6ನೇ ಸ್ಥಾನಕ್ಕೆ ಕುಸಿದ ʻಸೀತಾ ರಾಮʼ

geetha serial Dhanush gowda engagement
ಕಿರುತೆರೆ6 months ago

Dhanush Gowda: ಗೀತಾ ಧಾರಾವಾಹಿ ನಟನ ನಿಶ್ಚಿತಾರ್ಥ; ಭವ್ಯಾಳ ಕಮೆಂಟ್‌ ಬಾಕ್ಸ್‌ ಆಫ್‌!

varun
ಕಿರುತೆರೆ7 months ago

Brindavana Serial: ʼಬೃಂದಾವನʼ ಧಾರಾವಾಹಿಯಲ್ಲಿ ದೊಡ್ಡ ಟ್ವಿಸ್ಟ್‌; ಪ್ರಮುಖ ಪಾತ್ರಧಾರಿಯೇ ಬದಲು

Kannada Serials
ಕಿರುತೆರೆ9 months ago

Kannada Serials TRP: ಟಿಆರ್‌ಪಿಯಲ್ಲಿ ಏರಿಕೆ ಕಂಡ ʻಅಮೃತಧಾರೆʼ; ʻಗಟ್ಟಿಮೇಳʼಕ್ಕೆ ನಾಲ್ಕನೇ ಸ್ಥಾನ!

Karnataka weather Forecast
ಮಳೆ18 hours ago

Karnataka weather : ಮಳೆಯಲ್ಲೆ ತಪಸ್ಸಿಗೆ ಕುಳಿತ ವೃದ್ಧ; ಇನ್ನೊಂದು ವಾರ ನಾನ್‌ ಸ್ಟಾಪ್‌ ವರುಣನ ಅಬ್ಬರ

Sigandur launch
ಶಿವಮೊಗ್ಗ20 hours ago

Sigandur launch: ಸಿಗಂದೂರು ಲಾಂಚ್‌ನಲ್ಲಿ ಭಾರಿ ವಾಹನಗಳಿಗೆ ನಿರ್ಬಂಧ

Karnataka Rain
ಮಳೆ2 days ago

Karnataka Rain : ಭಾರಿ ಮಳೆಗೆ ಮರ ಬಿದ್ದು ಮೇಕೆಗಳು ಸಾವು; ಸಿಡಿಲಿಗೆ ಎಲೆಕ್ಟ್ರಿಕ್‌ ಅಂಗಡಿ ಸುಟ್ಟು ಭಸ್ಮ

Lok Sabha Election Result 2024 Live
ದೇಶ4 days ago

Lok Sabha Election Result 2024 Live: ಲೋಕಸಭೆ ಚುನಾವಣೆ ಫಲಿತಾಂಶದ ಲೈವ್‌ ಇಲ್ಲಿ ವೀಕ್ಷಿಸಿ

Karnataka Rain
ಮಳೆ5 days ago

Karnataka Rain : 133 ವರ್ಷದ ರೆಕಾರ್ಡ್ ಬ್ರೇಕ್ ಮಾಡಿದ ʻಬೆಂಗಳೂರು ಮಳೆʼ

Snake Rescue Snakes spotted in heavy rain
ಮಳೆ5 days ago

Snake Rescue: ಮಳೆ ನೀರಿನಲ್ಲಿ ಹರಿದು ಬಂದು ಬೈಕ್‌ನಲ್ಲಿ ಸೇರಿಕೊಂಡ ಹಾವು; ಮನೆಗಳಲ್ಲೂ ಪ್ರತ್ಯಕ್ಷ

Karnataka Rain
ಮಳೆ6 days ago

Karnataka Rain : ವೀಕೆಂಡ್‌ ಮೋಜಿಗೆ ವರುಣ ಅಡ್ಡಿ; ಭಾನುವಾರ ಸಂಜೆಗೆ ಮಳೆ ಕಾಟ

Liquor ban
ಬೆಂಗಳೂರು7 days ago

Liquor Ban : ಮುಂದಿನ ಏಳು ದಿನಗಳಲ್ಲಿ ನಾಲ್ಕೂವರೆ ದಿನ ಬಾರ್ ಕ್ಲೋಸ್; ಎಣ್ಣೆ ಸಿಗೋದು ಯಾವ ದಿನ?

Assault Case in Shivamogga
ಕ್ರೈಂ1 week ago

Assault Case : ಶಿವಮೊಗ್ಗದಲ್ಲಿ ಮತ್ತೆ ಬಾಲ ಬಿಚ್ಚಿದ ಪುಂಡರು; ಗಾಂಜಾ ನಶೆಯಲ್ಲಿ ವಾಹನಗಳು ಪೀಸ್‌ ಪೀಸ್‌

Karnataka weather Forecast
ಮಳೆ2 weeks ago

Karnataka Weather : ಚಿಕ್ಕಮಗಳೂರಲ್ಲಿ ಭಾರಿ ಮಳೆ; ಯಾದಗಿರಿಯಲ್ಲಿ ಕರೆಂಟ್‌ ಕಟ್‌, ಜನರೇಟರ್‌ನಿಂದ ಮೊಬೈಲ್‌ಗಳಿಗೆ ಚಾರ್ಜಿಂಗ್‌!

ಟ್ರೆಂಡಿಂಗ್‌