ಚೆನ್ನೈನ ಯುಎಸ್‌ ಕಾನ್ಸುಲೇಟ್ ಮುಖ್ಯಸ್ಥರಾಗಿ ಕ್ರಿಸ್ಟೋಫರ್ ಡಬ್ಲ್ಯು. ಹಾಡ್ಜಸ್ ಅಧಿಕಾರ ಸ್ವೀಕಾರ - Vistara News

ದೇಶ

ಚೆನ್ನೈನ ಯುಎಸ್‌ ಕಾನ್ಸುಲೇಟ್ ಮುಖ್ಯಸ್ಥರಾಗಿ ಕ್ರಿಸ್ಟೋಫರ್ ಡಬ್ಲ್ಯು. ಹಾಡ್ಜಸ್ ಅಧಿಕಾರ ಸ್ವೀಕಾರ

ಅಮೆರಿಕ- ಭಾರತದ ಸಂಬಂಧವು ಎರಡು ಸರ್ಕಾರಗಳ ನಡುವೆ ಮಾತ್ರವಲ್ಲ, ಉಭಯ ದೇಶಗಳ ಜನರ ನಡುವಿನ ಸಂಬಂಧ ಎಂಬುದನ್ನು ನಮ್ಮ ಪ್ರಯತ್ನಗಳು ಎತ್ತಿ ತೋರುತ್ತವೆ ಎಂದು ಕಾನ್ಸುಲ್ ಜನರಲ್ ಕ್ರಿಸ್ಟೋಫರ್ ಡಬ್ಲ್ಯು. ಹಾಡ್ಜಸ್ ತಿಳಿಸಿದ್ದಾರೆ.

VISTARANEWS.COM


on

Christopher W Hodges
ಮಹತ್ವದ, ಕುತೂಹಲಕರ ಸುದ್ದಿಗಾಗಿ ಫಾಲೊ ಮಾಡಿ
Koo

ಚೆನ್ನೈ: ನಗರದ ಅಮೆರಿಕ ದೂತಾವಾಸದ ಮುಖ್ಯಸ್ಥರಾಗಿ (ಕಾನ್ಸುಲ್ ಜನರಲ್) ಕ್ರಿಸ್ಟೋಫರ್ ಡಬ್ಲ್ಯು. ಹಾಡ್ಜಸ್ ಅವರು ಸೋಮವಾರ ಅಧಿಕಾರ ಸ್ವೀಕರಿಸಿದರು.

ಈ ಸಂದರ್ಭದಲ್ಲಿ ಮಾತನಾಡಿದ ಕಾನ್ಸುಲ್ ಜನರಲ್ ಹಾಡ್ಜಸ್ ಅವರು, ಅಮೇರಿಕ-ಭಾರತದ ಸಹಭಾಗಿತ್ವದ ಮಹತ್ವದ ಹೊತ್ತಿನಲ್ಲಿ ದಕ್ಷಿಣ ಭಾರತದಲ್ಲಿ ಅಮೆರಿಕವನ್ನು ಪ್ರತಿನಿಧಿಸುತ್ತಿರುವ ಗೌರವ ನನ್ನದು. ನಾವು ಸ್ಥಳೀಯ ಮತ್ತು ಪ್ರಾದೇಶಿಕವಾಗಿ ಮಾಡುವ ಕೆಲಸಗಳು ಉಭಯ ದೇಶಗಳ ನಡುವೆ ಶ್ರೀಮಂತ ವಾಣಿಜ್ಯ, ಶೈಕ್ಷಣಿಕ ಸಂಬಂಧಗಳು ಮತ್ತು ಬಾಹ್ಯಾಕಾಶ ವಲಯವೂ ಸೇರಿ ದ್ವಿಪಕ್ಷೀಯ ಸಹಭಾಗಿತ್ವವನ್ನು ವಿಸ್ತಾರಗೊಳಿಸುವಲ್ಲಿ ಕೊಡುಗೆ ನೀಡುತ್ತವೆ. ನಮ್ಮ ನಡುವಿನ ಬಾಂಧವ್ಯವನ್ನು ಇನ್ನಷ್ಟು ಹತ್ತಿರ ತರಲು ಕಾನ್ಸುಲರ್‌ ಸೇವೆಗಳನ್ನು ಒದಗಿಸುವುದಕ್ಕೆ ಹೆಮ್ಮೆಯಿದೆ ಎಂದು ತಿಳಿಸಿದರು.

ಅಮೆರಿಕ- ಭಾರತದ ಸಂಬಂಧವು ಎರಡು ಸರ್ಕಾರಗಳ ನಡುವೆ ಮಾತ್ರವಲ್ಲ, ಉಭಯ ದೇಶಗಳ ಜನರ ನಡುವಿನ ಸಂಬಂಧ ಎಂಬುದನ್ನು ನಮ್ಮ ಪ್ರಯತ್ನಗಳು ಎತ್ತಿ ತೋರುತ್ತವೆ. ನಮ್ಮ ಪ್ರಾಂತ್ಯದಲ್ಲಿ ಬರುವ ಕರ್ನಾಟಕ, ಕೇರಳ, ತಮಿಳುನಾಡು ಮತ್ತು ಮೂರು ಕೇಂದ್ರಾಡಳಿತ ಪ್ರದೇಶಗಳಾದ ಅಂಡಮಾನ್‌ ಮತ್ತು ನಿಕೊಬಾರ್‌, ಲಕ್ಷದ್ವೀಪ ಮತ್ತು ಪುದುಚೇರಿಗಳಲ್ಲಿ ಸಂಬಂಧವನ್ನು ಮತ್ತಷ್ಟು ಗಟ್ಟಿಗೊಳಿಸಲು ಎದುರು ನೋಡುತ್ತಿದ್ದೇನೆ ಎಂದು ಹೇಳಿದರು.

ಇದನ್ನೂ ಓದಿ | CM Siddaramaiah : ಆ. 3ರಂದು ಮೋದಿ ಭೇಟಿಯಾಗಲಿರುವ ಸಿದ್ದರಾಮಯ್ಯ; ಕಾಂಗ್ರೆಸ್‌ ಸಭೆ ಜತೆಗೆ ಪ್ರಧಾನಿ ಮೀಟಿಂಗ್‌

ಚೆನ್ನೈನಲ್ಲಿನ ಅಮೆರಿಕ ದೂತಾವಾಸದ ಕಾನ್ಸುಲ್ ಜನರಲ್‌ ಆಗಿ ಅಧಿಕಾರವಹಿಸಿಕೊಳ್ಳುವ ಮುನ್ನ ಹಾಡ್ಜಸ್‌ ಅವರು, ಕೋ ಆರ್ಡಿನೇಟರ್ ಫಾರ್ ಆಫ್ಘನ್ ರಿಲೊಕೇಷನ್ ಎಫರ್ಟ್ಸ್ (ಕೇರ್) ಕಚೇರಿಯ ಹಿರಿಯ ಸಲಹೆಗಾರರಾಗಿದ್ದರು. ಅದಕ್ಕೂ ಮುನ್ನ ಬ್ಯೂರೋ ಫಾರ್ ನಿಯರ್ ಈಸ್ಟ್ರನ್ ಅಫೇರ್ಸ್‌ನಲ್ಲಿ ಅಸಿಸ್ಟೆನ್ಸ್ ಕೋ ಆರ್ಡಿನೇಷನ್ ಆ್ಯಂಡ್ ಪ್ರೆಸ್ ಆ್ಯಂಡ್ ಪಬ್ಲಿಕ್ ಡಿಪ್ಲೊಮಸಿ ವಿಭಾಗದ ಡೆಪ್ಯುಟಿ ಅಸಿಸ್ಟೆಂಟ್ ಸೆಕ್ರೆಟರಿಯಾಗಿ ಹಾಗೂ ಇಸ್ರೇಲಿ-ಪ್ಯಾಲೆಸ್ಟಿನಿಯನ್ ವ್ಯವಹಾರಗಳ ಉಪ ಸಹಾಯಕ ಕಾರ್ಯದರ್ಶಿಯಾಗಿ ಕಾರ್ಯನಿರ್ವಹಿಸಿದ್ದರು. ಅವರು ಕಡೆಯದಾಗಿ ವಿದೇಶದಲ್ಲಿ ಕಾರ್ಯನಿರ್ವಹಿಸಿದ್ದು, ಜೆರೂಸಲೇಂನ ರಾಯಭಾರ ಕಚೇರಿಯಲ್ಲಿ ಅಸಿಸ್ಟೆಂಟ್ ಡೆಪ್ಯುಟಿ ಚೀಫ್ ಆಫ್ ಮಿಷನ್ ಮತ್ತು ಚೀಫ್ ಆಫ್ ದಿ ಪ್ಯಾಲೆಸ್ತೇನಿಯನ್ ಅಫೇರ್ಸ್ ಯೂನಿಟ್‌ನಲ್ಲಿ ಸೇವೆ ಸಲ್ಲಿಸಿದ್ದರು.

ಹಾಡ್ಜಸ್‌ ಅವರು 2000ರಲ್ಲಿ ವಿದೇಶಾಂಗ ಸೇವೆಗೆ ಸೇರ್ಪಡೆಯಾದರು. ಅವರು ಜೆರೂಸಲೇಂ, ಹನೊಯ್, ವಿಯೆಟ್ನಾಂ ಮತ್ತು ಅಕ್ಕ್ರಾ, ಘಾನಾದಲ್ಲಿ ಪಬ್ಲಿಕ್ ಅಫೇರ್ಸ್ ಆಫೀಸರ್ ಆಗಿ ಸೇವೆ ಸಲ್ಲಿಸಿದರು. ಅಲ್ಲದೆ ಆಸ್ಟ್ರಿಯಾ, ಜರ್ಮನಿ, ಸ್ವಿಟ್ಜರ್‌ಲೆಂಡ್ ಮತ್ತು ಲಿಷೆನ್ ಸ್ಟೀನ್‌ಗಳಲ್ಲಿ ಆಫೀಸ್ ಆಫ್ ದಿ ಸೆಂಟ್ರಲ್ ಯೂರೋಪಿಯನ್ ಅಫೇರ್ಸ್‌ನಲ್ಲಿ ಡೆಪ್ಯುಟಿ ಡೈರೆಕ್ಟರ್ ಆಗಿ ದುಡಿದಿದ್ದಾರೆ. ಸುವಾ, ಫಿಜಿ ಮತ್ತು ಫ್ರಾಂಕ್ ಫರ್ಟ್, ಜರ್ಮನಿಗಳಲ್ಲೂ ಕೆಲಸ ಮಾಡಿದ್ದಾರೆ.

ಕ್ಷಣ ಕ್ಷಣದ ಮಾಹಿತಿಗಾಗಿ Vistara News FaceBook ಪೇಜ್ ಫಾಲೋ ಮಾಡಿ
ಮಹತ್ವದ ಮಾಹಿತಿಗಾಗಿ ವಿಸ್ತಾರ ನ್ಯೂಸ್ ಆ್ಯಪ್ ಉಚಿತವಾಗಿ ಡೌನ್ ಲೋಡ್ ಮಾಡಿಕೊಳ್ಳಿ: Andriod App | IOS App
Continue Reading
Click to comment

Leave a Reply

Your email address will not be published. Required fields are marked *

ಪ್ರಮುಖ ಸುದ್ದಿ

PoK Crisis: ಪಾಕ್‌ ಆಕ್ರಮಿತ ಕಾಶ್ಮೀರದಲ್ಲಿ ದಂಗೆಯೆದ್ದ ಜನ, ಗಲಾಟೆ; ಭಾರತದ ಜತೆ ವಿಲೀನಕ್ಕೆ ಆಗ್ರಹ!

PoK Crisis: ಜಮ್ಮು-ಕಾಶ್ಮೀರ ಜಾಯಿಂಟ್‌ ಅವಾಮಿ ಆಕ್ಷನ್‌ ಕಮಿಟಿ ನೇತೃತ್ವದಲ್ಲಿ ಪ್ರತಿಭಟನೆ ನಡೆಸಲಾಗುತ್ತಿದ್ದು, ಇದರ ಹತ್ತಾರು ನಾಯಕರನ್ನು ಪೊಲೀಸರು ಬಂಧಿಸಿದ್ದಾರೆ. ಗುಂಪನ್ನು ಚದುರಿಸಲು ಪೊಲೀಸರು ಅಶ್ರುವಾಯು ಪ್ರಯೋಗ, ಲಾಠಿ ಚಾರ್ಜ್‌ ಮಾಡಿದರೂ ನಿಯಂತ್ರಿಸಲು ಆಗುತ್ತಿಲ್ಲ ಎನ್ನಲಾಗಿದೆ.

VISTARANEWS.COM


on

PoK
Koo

ಶ್ರೀನಗರ:‌ ಪಾಕ್‌ ಆಕ್ರಮಿತ ಕಾಶ್ಮೀರದಲ್ಲಿ (PoK Crisisi) ಪರಿಸ್ಥಿತಿ ಕೈಮೀರಿ ಹೋಗುತ್ತಿದೆ. ಸರ್ಕಾರ, ಅಧಿಕಾರಿಗಳ ವಿರುದ್ಧವೇ ಜನ ದಂಗೆ ಎದ್ದಿದ್ದಾರೆ. ಹಣದುಬ್ಬರ ಏರಿಕೆ (Inflation), ಹೆಚ್ಚಿನ ತೆರಿಗೆ ಹಾಗೂ ವಿದ್ಯುತ್‌ ಪೂರೈಕೆಯ ಕೊರತೆಯಿಂದಾಗಿ ಬೇಸತ್ತಿರುವ ಜನ ಸರ್ಕಾರದ ಕಚೇರಿಗಳು, ಪೊಲೀಸ್‌ ಅಧಿಕಾರಿಗಳ ಮೇಲೆಯೇ ದಾಳಿ ನಡೆಸುತ್ತಿದ್ದಾರೆ. ಅಷ್ಟೇ ಅಲ್ಲ, ಪಾಕ್‌ ಆಕ್ರಮಿತ ಕಾಶ್ಮೀರವನ್ನು ಭಾರತದ ಜತೆ ವಿಲೀನಗೊಳಿಸಬೇಕು ಎಂದು ಪ್ರತಿಭಟನಾಕಾರರು ಆಗ್ರಹಿಸುತ್ತಿದ್ದಾರೆ. ಹಾಗಾಗಿ, ಪಿಒಕೆ ಮೇಲೆ ಪಾಕಿಸ್ತಾನದ (Pakistan) ನಿಯಂತ್ರಣವು ಪೂರ್ತಿ ಕೈತಪ್ಪಿಹೋಗಿದೆ ಎಂದು ಹೇಳಲಾಗುತ್ತಿದೆ.

ಹೌದು, ಕಳೆದ ಎರಡು ದಿನಗಳಿಂದ ಪಾಕ್‌ ಆಕ್ರಮಿತ ಕಾಶ್ಮೀರದಲ್ಲಿ ಪ್ರತಿಭಟನೆ ತೀವ್ರಗೊಂಡಿದೆ. ಸುಮಾರು 10 ಜಿಲ್ಲೆಗಳಲ್ಲಿ ಜನ ಅಕ್ಷರಶಃ ದಂಗೆಯೆದ್ದಿದ್ದಾರೆ. ಮುಜಫರಾಬಾದ್‌ನಿಂದ ರಾವಲ್‌ಕೋಟ್‌ವರೆಗೆ ಜನ ಪ್ರತಿಭಟನಾ ಮೆರವಣಿಗೆ ನಡೆಸುತ್ತಿದ್ದಾರೆ. ಸೇನೆ ಹಾಗೂ ಪೊಲೀಸರ ವಾಹನಗಳ ಮೇಲೆ ಕಲ್ಲುತೂರಾಟ, ಸರ್ಕಾರಿ ಕಚೇರಿಗಳ ಮೇಲೆ ದಾಳಿ, ಪೊಲೀಸರ ಮೇಲೆ ಹಲ್ಲೆ ಸೇರಿ ಹಲವು ರೀತಿಯ ಹಿಂಸಾಚಾರ ಭುಗಿಲೆದ್ದಿದೆ. ಈಗಾಗಲೇ ಆರ್ಥಿಕವಾಗಿ ದಿವಾಳಿಯಾಗಿರುವ ಪಾಕಿಸ್ತಾನವು ಪಿಒಕೆಯನ್ನು ನಿಯಂತ್ರಿಸುವಲ್ಲಿ ವಿಫಲವಾಗಿದೆ ಎಂದು ವಿಶ್ಲೇಷಿಸಲಾಗಿದೆ.

ಭಾರತದ ಜತೆ ವಿಲೀನಕ್ಕೆ ಬೇಡಿಕೆ

ಭಾರತದ ಜತೆ ಪಾಕ್‌ ಆಕ್ರಮಿತ ಕಾಶ್ಮೀರವನ್ನು ವಿಲೀನಗೊಳಿಸಬೇಕು ಎಂಬುದು ಕೂಡ ಪ್ರತಿಭಟನಾಕಾರರ ಬೇಡಿಕೆಯಾಗಿದೆ. ಭಾರತದ ಪರ ಘೋಷಣೆಗಳು, ಭಾರತದ ಧ್ವಜ ಪ್ರದರ್ಶನಗಳು ಕೂಡ ನಡೆದಿವೆ. ಇನ್ನು, ಸ್ವಾತಂತ್ರ್ಯ ಬೇಕು, ಸ್ವಾತಂತ್ರ್ಯಕ್ಕಾಗಿ ಹೋರಾಟ ಎಂಬ ಘೋಷಣೆಗಳು ಕೂಡ ಕೇಳಿಬಂದಿವೆ. ಪೊಲೀಸರು, ಭದ್ರತಾ ಸಿಬ್ಬಂದಿ ಹಾಗೂ ಜನರ ನಡುವಿನ ಸಂಘರ್ಷಕ್ಕೆ ಒಬ್ಬ ಪೊಲೀಸ್‌ ಅಧಿಕಾರಿ ಬಲಿಯಾಗಿದ್ದಾರೆ. ಪೊಲೀಸರು, ಸೈನಿಕರು ಸೇರಿ ಸುಮಾರು 90 ಜನ ಗಾಯಗೊಂಡಿದ್ದಾರೆ ಎಂದು ತಿಳಿದುಬಂದಿದೆ. ಯಾವುದೇ ಕಾರಣಕ್ಕೂ ಜನರನ್ನು ನಿಯಂತ್ರಿಸಲು ಭದ್ರತಾ ಸಿಬ್ಬಂದಿಗೆ ಆಗುತ್ತಿಲ್ಲ ಎಂಬುದು ಸಾಮಾಜಿಕ ಜಾಲತಾಣಗಳಲ್ಲಿ ಹರಿದಾಡುತ್ತಿರುವ ವಿಡಿಯೊಗಳಿಂದ ಮಾಹಿತಿ ಲಭ್ಯವಾಗಿದೆ.

ಜಮ್ಮು-ಕಾಶ್ಮೀರ ಜಾಯಿಂಟ್‌ ಅವಾಮಿ ಆಕ್ಷನ್‌ ಕಮಿಟಿ ನೇತೃತ್ವದಲ್ಲಿ ಪ್ರತಿಭಟನೆ ನಡೆಸಲಾಗುತ್ತಿದ್ದು, ಇದರ ಹತ್ತಾರು ನಾಯಕರನ್ನು ಪೊಲೀಸರು ಬಂಧಿಸಿದ್ದಾರೆ. ಗುಂಪನ್ನು ಚದುರಿಸಲು ಪೊಲೀಸರು ಅಶ್ರುವಾಯು ಪ್ರಯೋಗ, ಲಾಠಿ ಚಾರ್ಜ್‌ ಮಾಡಿದರೂ ನಿಯಂತ್ರಿಸಲು ಆಗುತ್ತಿಲ್ಲ ಎನ್ನಲಾಗಿದೆ. ಈಗಾಗಲೇ ಪಿಒಕೆ ನಮ್ಮದು ಎಂದು ಕೇಂದ್ರ ಗೃಹ ಸಚಿವ ಅಮಿತ್‌ ಶಾ ಹೇಳಿದ್ದಾರೆ. ಪಿಒಕೆ ಜನರೇ ಭಾರತದ ಜತೆ ವಿಲೀನಗೊಳ್ಳಲು ಬಯಸುತ್ತಿದ್ದಾರೆ ಎಂದು ರಕ್ಷಣಾ ಸಚಿವ ರಾಜನಾಥ್‌ ಸಿಂಗ್‌ ಹೇಳಿದ್ದಾರೆ. ಇದರ ಬೆನ್ನಲ್ಲೇ, ಬಲೂಚಿಸ್ತಾನದ ಜತೆಗೆ ಪಿಒಕೆಯಲ್ಲೂ ದಂಗೆ ಶುರುವಾಗಿದೆ.

ಇದನ್ನೂ ಓದಿ: Pakistan Occupied Kashmir: ಪಾಕ್‌ ದಿವಾಳಿ, ಪಾಕ್‌ ಆಕ್ರಮಿತ ಕಾಶ್ಮೀರದಲ್ಲಿ ಹಿಂಸೆಯ ಹಾವಳಿ; ನಾಗರಿಕ ದಂಗೆ ಶುರು?

Continue Reading

ದೇಶ

Arvind Kejriwal: ಚೀನಾದಿಂದ ಭಾರತದ ನೆಲ ವಾಪಸ್‌ ಸೇರಿ 10 ಗ್ಯಾರಂಟಿ ಘೋಷಿಸಿದ ಕೇಜ್ರಿವಾಲ್

Arvind Kejriwal: ಜೈಲಿನಿಂದ ಬಿಡುಗಡೆಯಾಗಿ ಬಂದಿರುವ ಅರವಿಂದ್‌ ಕೇಜ್ರಿವಾಲ್‌ ಅವರು ಕೇಂದ್ರ ಸರ್ಕಾರ, ನರೇಂದ್ರ ಮೋದಿ ವಿರುದ್ಧ ವಾಗ್ದಾಳಿ ನಡೆಸುತ್ತಿದ್ದಾರೆ. ಅಬ್ಬರದ ಭಾಷಣಗಳ ಮೂಲಕ ಜನರ ವಿಶ್ವಾಸ ಗಳಿಸಲು ಯತ್ನಿಸುತ್ತಿದ್ದಾರೆ. ಇದರ ಬೆನ್ನಲ್ಲೇ, ಅವರು 10 ಗ್ಯಾರಂಟಿಗಳನ್ನು ಘೋಷಣೆ ಮಾಡಿದ್ದಾರೆ.

VISTARANEWS.COM


on

Arvind Kejriwal
Koo

ನವದೆಹಲಿ: ಅಬಕಾರಿ ನೀತಿ ಜಾರಿ ವೇಳೆ ಹಗರಣ ನಡೆದಿದೆ ಎನ್ನಲಾದ ಪ್ರಕರಣದಲ್ಲಿ ತಿಹಾರ ಜೈಲುಪಾಲಾಗಿದ್ದ ದೆಹಲಿ ಮುಖ್ಯಮಂತ್ರಿ ಅರವಿಂದ್‌ ಕೇಜ್ರಿವಾಲ್‌ (Arvind Kejriwal) ಅವರು ಮಧ್ಯಂತರ ಜಾಮೀನು ಪಡೆದು ಬಿಡುಗಡೆಯಾಗಿದ್ದಾರೆ. ಇದರ ಬೆನ್ನಲ್ಲೇ ಅವರು, ಲೋಕಸಭೆ ಚುನಾವಣೆ (Lok Sabha Election) ಹಿನ್ನೆಲೆಯಲ್ಲಿ ಜನರಿಗಾಗಿ 10 ಗ್ಯಾರಂಟಿಗಳನ್ನು ಘೋಷಣೆ ಮಾಡಿದ್ದಾರೆ. ಕೇಂದ್ರದಲ್ಲಿ ಇಂಡಿಯಾ ಒಕ್ಕೂಟ (India Bloc) ಅಧಿಕಾರಕ್ಕೆ ಬಂದರೆ ಇಷ್ಟೆಲ್ಲ ಗ್ಯಾರಂಟಿಗಳನ್ನು ಜಾರಿಗೊಳಿಸಲಾಗುವುದು ಎಂದಿದ್ದಾರೆ.

“ಲೋಕಸಭೆ ಚುನಾವಣೆ ಹಿನ್ನೆಲೆಯಲ್ಲಿ ನಾನಿಂದು 10 ಗ್ಯಾರಂಟಿಗಳನ್ನು ಘೋಷಣೆ ಮಾಡಿದ್ದೇನೆ. ನನ್ನ ಬಂಧನದಿಂದಾಗಿ ಘೋಷಣೆ ಮಾಡುವುದು ವಿಳಂಬವಾಯಿತು. ಆದರೂ, ದೇಶದಲ್ಲಿ ಇನ್ನೂ ಹಲವು ಹಂತಗಳ ಮತದಾನ ಬಾಕಿ ಇದೆ. ಹಾಗಂತ, ಇಂಡಿಯಾ ಒಕ್ಕೂಟದ ಪಕ್ಷಗಳ ಜತೆ ಚರ್ಚಿಸಿ ಗ್ಯಾರಂಟಿಗಳನ್ನು ಘೋಷಣೆ ಮಾಡಿಲ್ಲ. ಇದರಿಂದ ಅವರಿಗೆ ಯಾವುದೇ ತೊಂದರೆ ಇಲ್ಲ ಎಂದು ಭಾವಿಸಿದ್ದೇನೆ. ಇಂಡಿಯಾ ಒಕ್ಕೂಟವು ದೇಶದಲ್ಲಿ ಅಧಿಕಾರಕ್ಕೆ ಬಂದರೆ ಈ 10 ಗ್ಯಾರಂಟಿಗಳನ್ನು ಜಾರಿಗೆ ತರಲಾಗುವುದು” ಎಂದು ಹೇಳಿದರು.

ಕೇಜ್ರಿವಾಲ್‌ ಘೋಷಿಸಿದ ಪ್ರಮುಖ ಗ್ಯಾರಂಟಿಗಳು

  1. ದೇಶಾದ್ಯಂತ 24 ಗಂಟೆ ವಿದ್ಯುತ್‌ ಪೂರೈಸುವುದು. ಇದರಿಂದ ಬಡವರಿಗೆ, ಉದ್ಯಮಿಗಳಿಗೆ ಅನುಕೂ ಮಾಡಿಕೊಡುವುದು.
  2. ಕೇಂದ್ರ ಹಾಗೂ ರಾಜ್ಯಗಳ ಸಹಕಾರದೊಂದಿಗೆ 5 ಲಕ್ಷ ಕೋಟಿ ರೂ. ವೆಚ್ಚದಲ್ಲಿ ದೇಶಾದ್ಯಂತ ಶಾಲೆ ನಿರ್ಮಿಸಿ, ಬಡವರಿಗೆ ಶಿಕ್ಷಣ ನೀಡುವುದು
  3. ದೇಶಾದ್ಯಂತ ಮೊಹಲ್ಲಾ ಕ್ಲಿನಿಕ್‌ಗಳನ್ನು ಸ್ಥಾಪಿಸಿ, ಉಚಿತವಾಗಿ ಚಿಕಿತ್ಸೆ ನೀಡಲಾಗುವುದು
  4. ಚೀನಾದ ಹಿಡಿತದಲ್ಲಿರುವ ಭಾರತದ ಜಾಗವನ್ನು ವಾಪಸ್‌ ಪಡೆಯುವುದು
  5. ಅಗ್ನಿವೀರ ಯೋಜನೆಯನ್ನು ರದ್ದುಗೊಳಿಸಿ, ಸೇನೆಯನ್ನು ಇನ್ನಷ್ಟು ಬಲಪಡಿಸುವುದು
  6. ರೈತರಿಗೆ ಕನಿಷ್ಠ ಬೆಂಬಲ ಬೆಲೆಯ ಖಾತರಿ ನೀಡುವುದು
  7. ದೆಹಲಿಗೆ ರಾಜ್ಯ ಸ್ಥಾನಮಾನ ನೀಡುವ ಮೂಲಕ ಏಳಿಗೆಗೆ ಇನ್ನಷ್ಟು ಶ್ರಮಿಸುವುದು

ಗ್ಯಾರಂಟಿ ಘೋಷಿಸಿದ ಬಳಿಕ ಮಾತನಾಡಿದ ಕೇಜ್ರಿವಾಲ್‌, “ದೇಶದ ಬಡವರು ಹಾಗೂ ರೈತರನ್ನು ಗಮನದಲ್ಲಿಟ್ಟುಕೊಂಡು ಗ್ಯಾರಂಟಿಗಳನ್ನು ಘೋಷಣೆ ಮಾಡಿದ್ದೇವೆ. ಕೇಂದ್ರದಲ್ಲಿ ಇಂಡಿಯಾ ಒಕ್ಕೂಟದ ಸರ್ಕಾರ ಬಂದರೆ, ಬಡವರಿಗೆ ಆರೋಗ್ಯ, ಶಿಕ್ಷಣ, ಮೂಲ ಸೌಕರ್ಯಗಳನ್ನು ಒದಗಿಸಲಾಗುವುದು. ಇದಕ್ಕಾಗಿಯೇ ಗ್ಯಾರಂಟಿಗಳನ್ನು ಘೋಷನೆ ಮಾಡಿದ್ದೇವೆ” ಎಂದು ತಿಳಿಸಿದರು.

ಇದನ್ನೂ ಓದಿ: Narendra Modi: ಚುನಾವಣೆ ಪ್ರಚಾರದ ವೇಳೆ 5 ಗ್ಯಾರಂಟಿಗಳನ್ನು ಘೋಷಿಸಿದ ಮೋದಿ; ಏನವು?

Continue Reading

ಉದ್ಯೋಗ

Job Alert: ಟೆಕ್ಸ್‌ಟೈಲ್ಸ್‌ ಕಮಿಟಿಯಿಂದ 40 ಹುದ್ದೆಗಳ ಭರ್ತಿಗೆ ಅರ್ಜಿ ಆಹ್ವಾನ; ಬೆಂಗಳೂರಿನಲ್ಲೂ ಇದೆ ಪೋಸ್ಟಿಂಗ್‌

Job Alert: ಭಾರತ ಸರ್ಕಾರದ ಜವಳಿ ಸಚಿವಾಲಯದ ಟೆಕ್ಸ್‌ಟೈಲ್ಸ್‌ ಕಮಿಟಿ ತನ್ನಲ್ಲಿ ಖಾಲಿ ಇರುವ ವಿವಿಧ ಹುದ್ದೆಗಳ ಭರ್ತಿಗೆ ಅರ್ಜಿ ಆಹ್ವಾನಿಸಿದೆ. ದೇಶಾದ್ಯಂತ ಒಟ್ಟು 40 ಪ್ರಾಜೆಕ್ಟ್‌ ಅಸಿಸ್ಟಂಟ್‌ ಹುದ್ದೆ ಖಾಲಿ ಇದ್ದು, ಪದವೀಧರರು ಅರ್ಜಿ ಸಲ್ಲಿಸಬಹುದು. ಬೆಂಗಳೂರಿನಲ್ಲಿಯೂ ಹುದ್ದೆ ಖಾಲಿ ಇದ್ದು, ಆಸಕ್ತರು ಆಫ್‌ಲೈನ್‌ ಮೂಲಕ ಅರ್ಜಿ ಸಲ್ಲಿಸಬೇಕು. ಅರ್ಜಿ ಮೇ 31ರೊಳಗೆ ತಲುಪುವಂತಿರಬೇಕು. ಬಿಎಸ್‌ಸಿ (ಫಿಸಿಕ್ಸ್‌ ಅಥವಾ ಕೆಮಿಸ್ಟ್ರಿ) ಅಥವಾ ಟೆಕ್ಸ್‌ಟೈಲ್ಸ್‌ ಟೆಕ್ನಾಲಜಿಯಲ್ಲಿ ಬಿ.ಟೆಕ್‌ ಪದವಿ ಪಡೆದವರು ಅರ್ಜಿ ಸಲ್ಲಿಸಲು ಅರ್ಹರು. ಅರ್ಜಿ ಸಲ್ಲಿಸುವವರ ಕನಿಷ್ಠ ವಯಸ್ಸು 21 ವರ್ಷ ಮತ್ತು ಗರಿಷ್ಠ ವಯಸ್ಸು 35 ವರ್ಷ.

VISTARANEWS.COM


on

Job Alert
Koo

ಬೆಂಗಳೂರು: ಭಾರತ ಸರ್ಕಾರದ ಜವಳಿ ಸಚಿವಾಲಯ (Ministry of Textiles)ದ ಟೆಕ್ಸ್‌ಟೈಲ್ಸ್‌ ಕಮಿಟಿ (Textiles Committee) ತನ್ನಲ್ಲಿ ಖಾಲಿ ಇರುವ ವಿವಿಧ ಹುದ್ದೆಗಳ ಭರ್ತಿಗೆ ಅರ್ಜಿ ಆಹ್ವಾನಿಸಿದೆ. ದೇಶಾದ್ಯಂತ ಒಟ್ಟು 40 ಪ್ರಾಜೆಕ್ಟ್‌ ಅಸಿಸ್ಟಂಟ್‌ (Project Assistant) ಹುದ್ದೆ ಖಾಲಿ ಇದ್ದು, ಪದವೀಧರರು ಅರ್ಜಿ ಸಲ್ಲಿಸಬಹುದು (Textiles Committee Recruitment 2024). ಬೆಂಗಳೂರಿನಲ್ಲಿಯೂ ಹುದ್ದೆ ಖಾಲಿ ಇದ್ದು, ಆಸಕ್ತರು ಆಫ್‌ಲೈನ್‌ ಮೂಲಕ ಅರ್ಜಿ ಸಲ್ಲಿಸಬೇಕು. ಅರ್ಜಿ ಮೇ 31ರೊಳಗೆ ತಲುಪುವಂತಿರಬೇಕು ಎಂದು ಪ್ರಕಟಣೆ ತಿಳಿಸಿದೆ. ಸರ್ಕಾರಿ ಉದ್ಯೋಗದ ಕನಸು ಕಾಣುತ್ತಿರುವವರು ಈ ಅವಕಾಶವನ್ನು ಸದುಪಯೋಗಪಡಿಸಿಕೊಳ್ಳಬಹುದು (Job Alert).

ಹುದ್ದೆಗಳ ವಿವರ

ಬೆಂಗಳೂರು – 4, ಮುಂಬೈ – 7, ನವಿ ಮುಂಬೈ – 3, ಚೆನ್ನೈ – 3, ಕಾನ್ಪುರ – 1, ಕಣ್ಣೂರು – 1, ಕರೂರು – 1, ಹೈದರಾಬಾದ್‌ – 4, ಗುರುಗ್ರಾಮ – 3, ಜೈಪುರ – 2, ತಿರುಪುರ – 3, ಗುಂಟೂರು – 1, ಕೊಯಂಬತ್ತೂರು – 5, ಲುಧಿಯಾನ – 1, ಕೋಲ್ಕತ್ತಾ – 1 ಹುದ್ದೆಗಳಿವೆ.

ವಿದ್ಯಾರ್ಹತೆ ಮತ್ತು ವಯೋಮಿತಿ

ಬಿಎಸ್‌ಸಿ (ಫಿಸಿಕ್ಸ್‌ ಅಥವಾ ಕೆಮಿಸ್ಟ್ರಿ) ಅಥವಾ ಟೆಕ್ಸ್‌ಟೈಲ್ಸ್‌ ಟೆಕ್ನಾಲಜಿಯಲ್ಲಿ ಬಿ.ಟೆಕ್‌ ಪದವಿ ಪಡೆದವರು ಅರ್ಜಿ ಸಲ್ಲಿಸಲು ಅರ್ಹರು. ಅರ್ಜಿ ಸಲ್ಲಿಸುವವರ ಕನಿಷ್ಠ ವಯಸ್ಸು 21 ವರ್ಷ ಮತ್ತು ಗರಿಷ್ಠ ವಯಸ್ಸು 35 ವರ್ಷ.

ಆಯ್ಕೆ ವಿಧಾನ ಮತ್ತು ಮಾಸಿಕ ವೇತನ

ಲಿಖಿತ ಪರೀಕ್ಷೆ ಮತ್ತು ಸಂದರ್ಶನದ ಮೂಲಕ ಅಭ್ಯರ್ಥಿಗಳ ಆಯ್ಕೆ ನಡೆಯಲಿದೆ. ಆಯ್ಕೆಯಾದವರಿಗೆ 26 ಸಾವಿರ ರೂ. ಮಾಸಿಕ ವೇತನ ದೊರೆಯಲಿದೆ. ಆಯ್ಕೆಯಾದವರನ್ನು 3 ವರ್ಷಗಳ ಅವಧಿಗೆ ತಾತ್ಕಾಲಿಕವಾಗಿ ನೇಮಿಸಲಾಗುತ್ತದೆ ಎಂದು ಅಧಿಸೂಚನೆಯಲ್ಲಿ ತಿಳಿಸಲಾಗಿದೆ.

ಇದನ್ನು ಗಮನಿಸಿ

  • 2024ರ ಮಾರ್ಚ್‌ 31ಕ್ಕೆ ಹೊಂದಿಕೊಂಡು ಕನಿಷ್ಠ ಮತ್ತು ಗರಿಷ್ಠ ವಯಸ್ಸನ್ನು ನಿರ್ಧರಿಸಲಾಗುತ್ತದೆ.
  • ವಾರಕ್ಕೆ ಒಂದು ದಿನ ರಜೆ ಇರಲಿದ್ದು, ವರ್ಷಕ್ಕೆ 8 ಕ್ಯಾಶುವಲ್‌ ಲೀವ್‌ ನಿಗದಿಪಡಿಸಲಾಗಿದೆ.
  • ಟಿಎ / ಡಿಎ ಪಾವತಿಸಲಾಗುವುದಿಲ್ಲ.
  • ಅಭ್ಯರ್ಥಿಗಳು ಒಂದು ಕಡೆಗೆ ಮಾತ್ರ ಅರ್ಜಿ ಸಲ್ಲಿಸಬೇಕು.

Textiles Committee Recruitment 2024 ಅಧಿಸೂಚನೆಗಾಗಿ ಇಲ್ಲಿ ಕ್ಲಿಕ್‌ ಮಾಡಿ.

Textiles Committee Recruitment 2024 ಅಪ್ಲಿಕೇಷನ್‌ ಫಾರಂಗಾಗಿ ಇಲ್ಲಿ ಕ್ಲಿಕ್‌ ಮಾಡಿ.

ಅರ್ಜಿ ಸಲ್ಲಿಸುವ ವಿಧಾನ

  • ಅಪ್ಲಿಕೇಷನ್‌ ಫಾರಂ ಅನ್ನು ಡೌನ್‌ಲೋಡ್‌ ಮಾಡಿ ಪ್ರಿಂಟ್‌ ತೆಗೆದು ಭರ್ತಿ ಮಾಡಿ.
  • ಫೋಟೊ ಲಗತ್ತಿಸಿ.
  • ಸೆಲ್ಫ್‌ ಎಟೆಸ್ಟ್‌ ಮಾಡಿದ ಡಾಕ್ಯುಮೆಂಟ್‌ಗಳನ್ನು ಲಗತ್ತಿಸಿ ಈ ಕೆಳಗಿನ ವಿಳಾಸಕ್ಕೆ ಕಳುಹಿಸಿ:

Textiles Committee, FKCCI,
WTC Building, 1st Floor, Kempe Gowda Road,
Bangaluru – 560 009, Karnataka.

ಹೆಚ್ಚಿನ ವಿವರಗಳಿಗೆ ಫೋನ್‌ ನಂಬರ್‌: (080) 2226 1401, ಇಮೇಲ್‌: blr.tc@nic.inಗೆ ಸಂಪರ್ಕಿಸಿ. ಗಮನಿಸಿ ನಿಮ್ಮ ಅಪ್ಲಿಕೇಷನ್‌ ಫಾರಂ ಮೇ 31ರೊಳಗೆ ತಲುಪುವಂತಿರಬೇಕು.

ಇದನ್ನೂ ಓದಿ: Job Alert: ಇಂಡಿಯಾ ಪೋಸ್ಟ್‌ ಪೇಮೆಂಟ್‌ ಬ್ಯಾಂಕ್‌ನಲ್ಲಿದೆ ಉದ್ಯೋಗಾವಕಾಶ; ಆನ್‌ಲೈನ್‌ ಮೂಲಕ ಅರ್ಜಿ ಸಲ್ಲಿಸಿ

Continue Reading

ದೇಶ

Narendra Modi: ಚುನಾವಣೆ ಪ್ರಚಾರದ ವೇಳೆ 5 ಗ್ಯಾರಂಟಿಗಳನ್ನು ಘೋಷಿಸಿದ ಮೋದಿ; ಏನವು?

Narendra Modi: ಪಶ್ಚಿಮ ಬಂಗಾಳದ ಬರಾಕ್‌ಪುರದಲ್ಲಿ ಪ್ರಧಾನಿ ನರೇಂದ್ರ ಮೋದಿ ಅವರು ಭಾನುವಾರ ಅಬ್ಬರದ ಪ್ರಚಾರ ಕೈಗೊಂಡರು. ಇದೇ ವೇಳೆ ಟಿಎಂಸಿ ಸರ್ಕಾರದ ವಿರುದ್ಧ ಅವರು ವಾಗ್ಬಾಣ ಪ್ರಯೋಗಿಸಿದರು. ರೋಡ್‌ ಕೂಡ ಕೈಗೊಂಡು ಜನರ ವಿಶ್ವಾಸ ಗಳಿಸಲು ಯತ್ನಿಸಿದರು.

VISTARANEWS.COM


on

Narendra Modi
Koo

ಕೋಲ್ಕೊತಾ: ಲೋಕಸಭೆ ಚುನಾವಣೆಯ (Lok Sabha Election 2024) ಮೂರು ಹಂತದ ಮತದಾನ ಮುಗಿದು, ನಾಲ್ಕನೇ ಹಂತದ ಮತದಾನಕ್ಕೆ ಕೆಲವೇ ಗಂಟೆ ಬಾಕಿ ಇವೆ. ಇದರ ಮಧ್ಯೆಯೇ ಪ್ರಧಾನಿ ನರೇಂದ್ರ ಮೋದಿ (Narendra Modi) ಅವರು ಪಶ್ಚಿಮ ಬಂಗಾಳದಲ್ಲಿ (West Bengal) ಅಬ್ಬರದ ಪ್ರಚಾರ ಮಾಡಿದ್ದಾರೆ. ಆಡಳಿತಾರೂಢ ತೃಣಮೂಲ ಕಾಂಗ್ರೆಸ್‌ (TMC) ವಿರುದ್ಧ ವಾಗ್ದಾಳಿ ನಡೆಸುವ ಜತೆಗೆ ಮೋದಿ ಅವರು ಪಶ್ಚಿಮ ಬಂಗಾಳಕ್ಕಾಗಿ ಐದು ಗ್ಯಾರಂಟಿಗಳನ್ನು ಘೋಷಣೆ ಮಾಡಿದರು.

ಪಶ್ಚಿಮ ಬಂಗಾಳದ ಪರಾಕ್‌ಪುರದಲ್ಲಿ ನಡೆದ ಚುನಾವಣೆ ಸಮಾವೇಶದಲ್ಲಿ ಮಾತನಾಡಿದ ಅವರು, “ನಾನು ಪಶ್ಚಿಮ ಬಂಗಾಳದ ಜನರಿಗೆ ಐದು ಗ್ಯಾರಂಟಿಗಳನ್ನು ನೀಡುತ್ತಿದ್ದೇನೆ. ನಾನು ಇರುವವರೆಗೆ ಧರ್ಮದ ಆಧಾರದ ಮೇಲೆ ಮೀಸಲಾತಿ ಕೊಡಲು ಬಿಡಲ್ಲ. ಎಸ್‌ಸಿ, ಎಸ್‌ಟಿ ಹಾಗೂ ಒಬಿಸಿ ಮೀಸಲಾತಿಯನ್ನು ರದ್ದುಗೊಳಿಸಲು ಬಿಡುವುದಿಲ್ಲ. ನೀವು ರಾಮನವಮಿಯನ್ನು ಆಚರಿಸುವುದನ್ನು ತಡೆಯಲು ಯಾರಿಂದಲೂ ಆಗಲ್ಲ. ಪಶ್ಚಿಮ ಬಂಗಾಳದಲ್ಲಿ ಸಿಎಎ ಜಾರಿಯನ್ನು ತಡೆಯಲು ಬಿಡುವುದಿಲ್ಲ. ಅಯೋಧ್ಯೆಯಲ್ಲಿ ರಾಮಮಂದಿರ ನಿರ್ಮಾಣದ ಕುರಿತು ಸುಪ್ರೀಂ ಕೋರ್ಟ್‌ ನೀಡಿರುವ ತೀರ್ಪನ್ನು ಯಾರಿಂದಲೂ ಬದಲಿಸಲು ಬಿಡಲ್ಲ” ಎಂದು ಮೋದಿ ಅವರು ಐದು ಗ್ಯಾರಂಟಿಗಳನ್ನು ಘೋಷಿಸಿದರು.

ಕಾಂಗ್ರೆಸ್‌ ವಿರುದ್ಧ ವಾಗ್ದಾಳಿ

ಭಾಷಣದ ವೇಳೆ ಮೋದಿ ಕಾಂಗ್ರೆಸ್‌ ವಿರುದ್ಧ ವಾಗ್ದಾಳಿ ನಡೆಸಿದರು. “ಸ್ವಾತಂತ್ರ್ಯದ ಬಳಿಕ ಕಾಂಗ್ರೆಸ್‌ನ ಒಂದು ಕುಟುಂಬದ ಸದಸ್ಯರು ದೇಶವನ್ನು ದಶಕಗಳವರೆಗೆ ಆಳಿದರು. ಆದರೆ, ಅವರು ಪೂರ್ವ ಭಾರತದ ಅಭಿವೃದ್ಧಿಯನ್ನು ನಿರ್ಲಕ್ಷಿಸಿದರು. ಪಶ್ಚಿಮ ಬಂಗಾಳ, ಬಿಹಾರ, ಜಾರ್ಖಂಡ್‌, ಒಡಿಶಾ ಸೇರಿ ಹಲವು ರಾಜ್ಯಗಳ ಅಭಿವೃದ್ಧಿಯನ್ನು ಕಾಂಗ್ರೆಸ್‌ ಕಡೆಗಣಿಸಿತು. ಆದರೆ, ನೀವು 2014ರಲ್ಲಿ ಮೋದಿಯನ್ನು ಆಯ್ಕೆ ಮಾಡಿದಿರಿ. ಹಾಗಾಗಿ, ಈಗ ಇಡೀ ದೇಶವೇ ಏಳಿಗೆ ಹೊಂದುತ್ತಿದೆ. ಆರ್ಥಿಕತೆಯಲ್ಲಿ ನಾವು ದಾಪುಗಾಲು ಇಡುತ್ತಿದ್ದೇವೆ” ಎಂದರು.

ಪ್ರಧಾನಿ ರೋಡ್‌ ಶೋ

ಪಶ್ಚಿಮ ಬಂಗಾಳದ ಟಿಎಂಸಿ ಸರ್ಕಾರಕ್ಕೂ ಮೋದಿ ಚಾಟಿ ಬೀಸಿದರು. “ಪಶ್ಚಿಮ ಬಂಗಾಳದಲ್ಲಿ ಕಾನೂನು ಸುವ್ಯವಸ್ಥೆ ಹದಗೆಟ್ಟು ಹೋಗಿದೆ. ಒಂದು ಕಾಲದಲ್ಲಿ ವೈಜ್ಞಾನಿಕ ಆವಿಷ್ಕಾರಗಳಿಗೆ ಬಂಗಾಳ ಖ್ಯಾತಿಯಾಗಿತ್ತು. ಆದರೆ, ಈಗ ರಾಜ್ಯದಲ್ಲಿ ಬಾಂಬ್‌ ತಯಾರಿಕೆ ಉದ್ಯಮವೇ ಹುಟ್ಟಿಕೊಂಡಿದೆ. ಒಂದು ಕಾಲದಲ್ಲಿ ಬಂಗಾಳದಲ್ಲಿ ಒಳನುಸುಳುಕೋರರ ವಿರುದ್ಧ ಕ್ರಾಂತಿ ನಡೆದಿತ್ತು. ಈಗ ನುಸುಳುಕೋರರಿಗೆ ರಾಜ್ಯದಲ್ಲಿ ರಕ್ಷಣೆ ನೀಡಲಾಗುತ್ತಿದೆ” ಎಂದು ವಾಗ್ದಾಳಿ ನಡೆಸಿದರು. ಅಲ್ಲದೆ, ಬರಾಕ್‌ಪುರದಲ್ಲಿ ಮೋದಿ ಅಬ್ಬರದ ರೋಡ್‌ ಶೋ ಕೂಡ ಕೈಗೊಂಡರು.

ಇದನ್ನೂ ಓದಿ: ಮೋದಿಯಿಂದ ಯೋಗಿ ಆದಿತ್ಯನಾಥ್‌ ರಾಜಕೀಯ ಜೀವನ ಶೀಘ್ರದಲ್ಲೇ ಖತಂ; ಕೇಜ್ರಿವಾಲ್‌ ಸ್ಫೋಟಕ ಭವಿಷ್ಯ

Continue Reading
Advertisement
Neha Murder Case
ಕರ್ನಾಟಕ4 mins ago

Neha Murder Case: ನೇಹಾ ಕೊಲೆ ಪ್ರಕರಣ; ಚಾರ್ಜ್‌ಶೀಟ್ ಸಲ್ಲಿಸಲು ಸಿಐಡಿ ತಯಾರಿ

Prajwal Revanna Case Will Not Be Handed Over To CBI Says Cm Siddaramaiah
Lok Sabha Election 202427 mins ago

Prajwal Revanna Case: ಪ್ರಜ್ವಲ್‌ ಪೆನ್‌ಡ್ರೈವ್‌ ಕೇಸ್;‌ ಸಿಬಿಐಗೆ ಏಕೆ ಕೊಡಲ್ಲ ಎಂದು ಕಾರಣ ಬಿಚ್ಚಿಟ್ಟ ಸಿಎಂ ಸಿದ್ದರಾಮಯ್ಯ

Drowned in water
ಚಿಕ್ಕಬಳ್ಳಾಪುರ29 mins ago

Drowned in water : ಕೆರೆಯಲ್ಲಿ ಈಜುವ ಸವಾಲು; ಜೋಶ್‌ನಲ್ಲಿ ನೀರಿಗೆ ಇಳಿದ ಟೆಕ್ಕಿ ಮೃತ್ಯು

PoK
ಪ್ರಮುಖ ಸುದ್ದಿ31 mins ago

PoK Crisis: ಪಾಕ್‌ ಆಕ್ರಮಿತ ಕಾಶ್ಮೀರದಲ್ಲಿ ದಂಗೆಯೆದ್ದ ಜನ, ಗಲಾಟೆ; ಭಾರತದ ಜತೆ ವಿಲೀನಕ್ಕೆ ಆಗ್ರಹ!

Pig Kidney
ವಿದೇಶ36 mins ago

Pig Kidney: ಹಂದಿಯ ಮೂತ್ರಪಿಂಡ ಕಸಿ ಮಾಡಿಸಿಕೊಂಡಿದ್ದ ವ್ಯಕ್ತಿ 2 ತಿಂಗಳ ಬಳಿಕ ಸಾವು

Arvind Kejriwal
ದೇಶ2 hours ago

Arvind Kejriwal: ಚೀನಾದಿಂದ ಭಾರತದ ನೆಲ ವಾಪಸ್‌ ಸೇರಿ 10 ಗ್ಯಾರಂಟಿ ಘೋಷಿಸಿದ ಕೇಜ್ರಿವಾಲ್

Prajwal Revanna Case: Beware of making a statement Parameshwara warns to HD Kumaraswamy
ಕ್ರೈಂ2 hours ago

Prajwal Revanna Case: ಪ್ರಜ್ವಲ್‌ ರೇವಣ್ಣ ಕೇಸ್‌; ನಿಮ್ಮನ್ನೂ ವಿಚಾರಣೆಗೆ ಕರೆಯಬೇಕಾಗುತ್ತದೆ: ಎಚ್‌ಡಿಕೆಗೆ ಪರಮೇಶ್ವರ್‌ ವಾರ್ನಿಂಗ್‌!

Road Accident
ಕ್ರೈಂ3 hours ago

Road Accident : ತಂದೆ ಜತೆಗೆ ಕಾರ್‌ ವಾಶ್‌ ಮಾಡುವಾಗ ಎಕ್ಸಿಲೇಟರ್‌ ತುಳಿದ ಬಾಲಕ; ಆಟವಾಡುತ್ತಿದ್ದ ಮಗು ಅಪ್ಪಚ್ಚಿ

Ram Charan get mobbed by fans during public appearances
ಸಿನಿಮಾ3 hours ago

Ram Charan: ಚುನಾವಣಾ ಪ್ರಚಾರದ ವೇಳೆ ರಾಮ್ ಚರಣ್ ಶರ್ಟ್‌ ಹರಿದ ಫ್ಯಾನ್ಸ್‌: ಅಲ್ಲು ಸುತ್ತ ಜನವೋ ಜನ!

Mother's Day 2024 Duniya Vijay jaggesh Post Viral
ಸಿನಿಮಾ3 hours ago

Mother’s Day 2024: ಅಮ್ಮನ ನೆನೆದಾಗ ಮಗುವಾಗುವೆ ಎಂದ ಜಗ್ಗೇಶ್‌: ದುನಿಯಾ ವಿಜಯ್‌ ಭಾವುಕ ಪೋಸ್ಟ್‌!

Sharmitha Gowda in bikini
ಕಿರುತೆರೆ7 months ago

Geetha Serial Kannada: ನಿದ್ದೆ ಕದ್ದ ಚೋರಿ! ನಟಿ `ಭಾನುಮತಿ’ ಹಾಟ್‌ ಪೋಟೊಗಳಿಗೆ ಫ್ಯಾನ್ಸ್ ಫುಲ್ ಫಿದಾ

Kannada Serials
ಕಿರುತೆರೆ7 months ago

Kannada Serials TRP: 2ನೇ ಸ್ಥಾನದಲ್ಲಿ 2 ಧಾರಾವಾಹಿಗಳು; ಟಿಆರ್‌ಪಿ ರೇಸ್‌ನಲ್ಲಿಲ್ಲ ಭಾಗ್ಯಲಕ್ಷ್ಮೀ!

Bigg Boss- Saregamapa 20 average TRP
ಕಿರುತೆರೆ7 months ago

Kannada Serials TRP: ಏಳನೇ ಸ್ಥಾನಕ್ಕೆ ʻಅಮೃತಧಾರೆʼ ಕುಸಿತ; ಬಿಗ್‌ ಬಾಸ್‌-ಸರಿಗಮಪ ಟಿಆರ್‌ಪಿ ಎಷ್ಟು?

galipata neetu
ಕಿರುತೆರೆ5 months ago

Kanyadana Serial: ಕಿರುತೆರೆಗೆ ಮತ್ತೆ ಎಂಟ್ರಿ ಕೊಟ್ಟ ʻಗಾಳಿಪಟʼ ಖ್ಯಾತಿಯ ʻನೀತುʼ!

Kannada Serials
ಕಿರುತೆರೆ8 months ago

Kannada Serials TRP: ನಾಲ್ಕನೇ ಸ್ಥಾನಕ್ಕೆ ಕುಸಿತ ಕಂಡ ʻಸೀತಾ ರಾಮʼ; ಟಿಆರ್‌ಪಿ ರೇಸ್‌ಗೆ ʻಭಾಗ್ಯಲಕ್ಷ್ಮಿʼ ಬ್ಯಾಕ್‌!

Kannada Serials
ಕಿರುತೆರೆ7 months ago

Kannada Serials TRP: ಟಿಆರ್‌ಪಿಯಲ್ಲಿ ʻಭಾಗ್ಯಲಕ್ಷ್ಮೀʼ ಹವಾ; ʻಪುಟ್ಟಕ್ಕನ ಮಕ್ಕಳುʼ ಧಾರಾವಾಹಿಗೆ ಸಂಕಷ್ಟ!

Bigg Boss' dominates TRP; Sita Rama fell to the sixth position
ಕಿರುತೆರೆ7 months ago

Kannada Serials TRP: ಟಿಆರ್‌ಪಿಯಲ್ಲಿ ʻಬಿಗ್ ಬಾಸ್ʼದೇ ಮೇಲುಗೈ; 6ನೇ ಸ್ಥಾನಕ್ಕೆ ಕುಸಿದ ʻಸೀತಾ ರಾಮʼ

geetha serial Dhanush gowda engagement
ಕಿರುತೆರೆ5 months ago

Dhanush Gowda: ಗೀತಾ ಧಾರಾವಾಹಿ ನಟನ ನಿಶ್ಚಿತಾರ್ಥ; ಭವ್ಯಾಳ ಕಮೆಂಟ್‌ ಬಾಕ್ಸ್‌ ಆಫ್‌!

varun
ಕಿರುತೆರೆ6 months ago

Brindavana Serial: ʼಬೃಂದಾವನʼ ಧಾರಾವಾಹಿಯಲ್ಲಿ ದೊಡ್ಡ ಟ್ವಿಸ್ಟ್‌; ಪ್ರಮುಖ ಪಾತ್ರಧಾರಿಯೇ ಬದಲು

Kannada Serials
ಕಿರುತೆರೆ8 months ago

Kannada Serials TRP: ಟಿಆರ್‌ಪಿಯಲ್ಲಿ ಏರಿಕೆ ಕಂಡ ʻಅಮೃತಧಾರೆʼ; ʻಗಟ್ಟಿಮೇಳʼಕ್ಕೆ ನಾಲ್ಕನೇ ಸ್ಥಾನ!

Prajwal Revanna Case: Beware of making a statement Parameshwara warns to HD Kumaraswamy
ಕ್ರೈಂ2 hours ago

Prajwal Revanna Case: ಪ್ರಜ್ವಲ್‌ ರೇವಣ್ಣ ಕೇಸ್‌; ನಿಮ್ಮನ್ನೂ ವಿಚಾರಣೆಗೆ ಕರೆಯಬೇಕಾಗುತ್ತದೆ: ಎಚ್‌ಡಿಕೆಗೆ ಪರಮೇಶ್ವರ್‌ ವಾರ್ನಿಂಗ್‌!

Prajwal Revanna Case Two people of pen drive allottees arrested
ಕ್ರೈಂ4 hours ago

Prajwal Revanna Case: ಪ್ರಜ್ವಲ್‌ ರೇವಣ್ಣ ಅಶ್ಲೀಲ ವಿಡಿಯೊ ಕೇಸ್‌; ಇಬ್ಬರು ಪೆನ್‌ಡ್ರೈವ್‌ ಹಂಚಿಕೆದಾರರ ಅರೆಸ್ಟ್‌

Dina Bhavishya
ಭವಿಷ್ಯ11 hours ago

Dina Bhavishya: ಹತಾಶೆಯಲ್ಲಿ ಈ ತೀರ್ಮಾನ ಮಾಡಲೇಬೇಡಿ; ಈ ರಾಶಿಯವರು ಜೀವನ ಪೂರ್ತಿ ಕೊರಗಬೇಕಾಗುತ್ತೆ!

Bengaluru News
ಬೆಂಗಳೂರು1 day ago

Bengaluru News : ಕೆಎಎಸ್‌ ಅಧಿಕಾರಿ ಪತ್ನಿ ಅನುಮಾನಾಸ್ಪದ‌ ಸಾವು; ಹೈಕೋರ್ಟ್‌ ವಕೀಲೆಗೆ ಕಾಡಿದ್ದೇನು?

Dina Bhavishya
ಭವಿಷ್ಯ1 day ago

Dina Bhavishya : ಈ ದಿನ ಅತಿರೇಕದ ಮಾತುಗಳು ಅಪಾಯ ತರಬಹುದು

Physical Abuse The public prosecutor called the client woman to the lodge
ಕ್ರೈಂ2 days ago

Physical Abuse : ಲೈಂಗಿಕ ದೌರ್ಜನ್ಯ; ಕಕ್ಷಿದಾರ ಮಹಿಳೆಯನ್ನು ಮಂಚಕ್ಕೆ ಕರೆದ ಪಬ್ಲಿಕ್ ಪ್ರಾಸಿಕ್ಯೂಟರ್!

murder case kalaburagi
ಕಲಬುರಗಿ2 days ago

Murder Case : ಕಾಂಗ್ರೆಸ್‌ಗೆ ವೋಟ್‌ ಹಾಕಿದ್ದಕ್ಕೆ ಅಮಾವಾಸ್ಯೆ ದಿನ ಕರೆದು ಕೊಂದರು

Rain Effect In karnataka
ಮಳೆ2 days ago

Rain Effect : ಬಿರುಗಾಳಿ ರಭಸಕ್ಕೆ ಮನೆಯ ಗೇಟ್ ಬಿದ್ದು ಬಾಲಕಿ ಸಾವು; ಸಿಡಿಲಿಗೆ ಎತ್ತುಗಳು ಬಲಿ

Dina Bhavishya
ಭವಿಷ್ಯ2 days ago

Dina Bhavishya: ಶುಭ ಶುಕ್ರವಾರ ಈ ರಾಶಿಯವರಿಗೆ ಖುಲಾಯಿಸಲಿದೆ ಲಕ್‌

Prajwal Revanna case Revanna bail plea to be heard on Monday Advocate Nagesh argument was as follows
ಕ್ರೈಂ3 days ago

Prajwal Revanna Case: ರೇವಣ್ಣ ಜಾಮೀನು ಅರ್ಜಿ ಸೋಮವಾರಕ್ಕೆ: ಎಸ್‌ಐಟಿಗೆ ಹಿಗ್ಗಾಮುಗ್ಗಾ ತರಾಟೆ; ವಕೀಲ ನಾಗೇಶ್‌ ವಾದ ಹೀಗಿತ್ತು!

ಟ್ರೆಂಡಿಂಗ್‌