IBC Investment: ರಾಜ್ಯದಲ್ಲಿ ಐಬಿಸಿ 8 ಸಾವಿರ ಕೋಟಿ ರೂ. ಹೂಡಿಕೆ; ಎಲೆಕ್ಟ್ರಿಕ್‌ ವೆಹಿಕಲ್ ಬ್ಯಾಟರಿ ಉತ್ಪಾದನೆಗೆ ಬಲ - Vistara News

ಕರ್ನಾಟಕ

IBC Investment: ರಾಜ್ಯದಲ್ಲಿ ಐಬಿಸಿ 8 ಸಾವಿರ ಕೋಟಿ ರೂ. ಹೂಡಿಕೆ; ಎಲೆಕ್ಟ್ರಿಕ್‌ ವೆಹಿಕಲ್ ಬ್ಯಾಟರಿ ಉತ್ಪಾದನೆಗೆ ಬಲ

IBC Investment: ಕರ್ನಾಟಕದಲ್ಲಿ ಐಬಿಸಿಯು ಲೀಥಿಯಂ-ಐಯಾನ್‌ ಬ್ಯಾಟರಿಗಳನ್ನು ಉತ್ಪಾದನೆ ಮಾಡುವುದರಿಂದ ರಾಜ್ಯದಲ್ಲಿ ವಿದ್ಯುತ್‌ಚಾಲಿತ ವಾಹನಗಳ ಬಳಕೆಗೆ ಉತ್ತೇಜನ, ಉದ್ಯಮ ಏಳಿಗೆಯಾಗಲಿದೆ.

VISTARANEWS.COM


on

M B Patil MoU With IBC To Invest In Karnataka
ಐಬಿಸಿ ಜತೆ ಒಡಂಬಡಿಕೆ ಮಾಡಿಕೊಂಡ ಸಚಿವ ಎಂ.ಬಿ.ಪಾಟೀಲ್.
ಮಹತ್ವದ, ಕುತೂಹಲಕರ ಸುದ್ದಿಗಾಗಿ ಫಾಲೊ ಮಾಡಿ
Koo

ಬೆಂಗಳೂರು: ವಿದ್ಯುತ್‌ಚಾಲಿತ ವಾಹನಗಳಿಗೆ (EV) ಅತ್ಯಗತ್ಯವಾದ ಲೀಥಿಯಂ-ಐಯಾನ್ ಬ್ಯಾಟರಿಗಳ ಉತ್ಪಾದನೆಗೆ ಜಾಗತಿಕ ಮಟ್ಟದ ಹೆಸರು ಮಾಡಿರುವ ಇಂಟರ್‌ನ್ಯಾಷನಲ್‌ ಬ್ಯಾಟರಿ ಕಂಪನಿಯು(IBC Investment) ಕರ್ನಾಟಕದಲ್ಲಿ 8 ಸಾವಿರ ಕೋಟಿ ರೂ. ಹೂಡಿಕೆ ಮಾಡಲು ನಿರ್ಧರಿಸಿದೆ. ಇದಕ್ಕಾಗಿ ಕರ್ನಾಟಕ ಸರ್ಕಾರ ಹಾಗೂ ಐಬಿಸಿಯು ಒಡಂಬಡಿಕೆ (MoU) ಮಾಡಿಕೊಂಡಿದೆ. ಇದರಿಂದಾಗಿ ವಿದ್ಯುತ್‌ಚಾಲಿತ ವಾಹನಗಳ ಬಳಕೆಗೆ ಉತ್ತೇಜನ, ಉದ್ಯಮದ ಏಳಿಗೆ ಸೇರಿ ಹಲವು ದಿಸೆಯಲ್ಲಿ ರಾಜ್ಯಕ್ಕೆ ಅನುಕೂಲವಾಗಲಿದೆ ಎಂದು ತಿಳಿದುಬಂದಿದೆ.

“ಲೀಥಿಯಂ ಕೋಶಗಳ ತಯಾರಿಕೆಗೆ ಹೆಸರಾಗಿರುವ ಇಂಟರ್ ನ್ಯಾಷನಲ್ ಬ್ಯಾಟರಿ ಕಂಪನಿಯು ಕರ್ನಾಟಕದಲ್ಲಿ 8 ಸಾವಿರ ಕೋಟಿ ರೂ. ಕೋಟಿ ಹೂಡಿಕೆ ಮಾಡಲು ಆಸಕ್ತಿ ತೋರಿದೆ. ಈ ಕುರಿತಂತೆ ಇಂದು ರಾಜ್ಯ ಸರ್ಕಾರದೊಂದಿಗೆ ಒಡಂಬಡಿಕೆ ಮಾಡಿಕೊಂಡಿದೆ. ರಾಜ್ಯದಲ್ಲಿ ಸುಮಾರು 100 ಎಕರೆ ಪ್ರದೇಶದಲ್ಲಿ IBC ತನ್ನ ಸ್ಥಾವರ ನಿರ್ಮಿಸಲಿದೆ. ಭವಿಷ್ಯದಲ್ಲಿ ಹಸಿರು ಇಂಧನ ಕ್ಷೇತ್ರದಲ್ಲಿ ರಾಜ್ಯ ಮಹತ್ತರ ಸಾಧನೆ ಮಾಡಲಿದೆ ಎಂಬ ವಿಶ್ವಾಸ ಮೂಡಿಸಿದೆ” ಎಂದು ಬೃಹತ್‌ ಮತ್ತು ಮಧ್ಯಮ ಕೈಗಾರಿಕೆ ಸಚಿವ ಎಂ.ಬಿ.ಪಾಟೀಲ್‌ ತಿಳಿಸಿದ್ದಾರೆ.

ಇದನ್ನೂ ಓದಿ: Tesla CEO Elon Musk : ಕರ್ನಾಟಕದಲ್ಲಿ ಹೂಡಿಕೆಗೆ ಎಲಾನ್‌ ಮಸ್ಕ್‌ಗೆ ರಾಜ್ಯ ಸರ್ಕಾರ ಆಹ್ವಾನ, ಕೊಟ್ಟಿರುವ ಆಫರ್‌ ಏನು?

ಬೆಂಗಳೂರು ಗ್ರಾಮಾಂತರ ಜಿಲ್ಲೆಯ ದೇವನಹಳ್ಳಿಯಲ್ಲಿ ಐಬಿಸಿಯು 100 ಎಕರೆ ಜಾಗದಲ್ಲಿ ಬ್ಯಾಟರಿ ಉತ್ಪಾದನೆ ಘಟಕ ಸ್ಥಾಪಿಸಲಿದೆ. “ಕರ್ನಾಟಕದಲ್ಲಿ ಐಬಿಸಿಯು ಬ್ಯಾಟರಿ ಉತ್ಪಾದನೆ ಘಟಕ ಸ್ಥಾಪಿಸಿದರೆ ರಾಜ್ಯದಲ್ಲಿ ಎರಡನೇ ಘಟಕದ ಕನಸು ನನಸಾದಂತಾಗಲಿದೆ. ಅಲ್ಲದೆ, ದೇಶದಲ್ಲಿ ವಿದ್ಯುತ್‌ಚಾಲಿತ ವಾಹನಗಳ ಬ್ಯಾಟರಿ ಉತ್ಪಾದನೆಯಲ್ಲಿ ಕರ್ನಾಟಕ ಮುಂಚೂಣಿಯಲ್ಲಿರಲಿದೆ” ಎಂದು ಎಂ.ಬಿ. ಪಾಟೀಲ್‌ ತಿಳಿಸಿದರು.

ಐಬಿಸಿಯು ಮರುಬಳಕೆ ಮಾಡಬಹುದಾದ ಬ್ಯಾಟರಿಗಳನ್ನು ಉತ್ಪಾದನೆ ಮಾಡಲಿದೆ. ಎಂಟು ಸಾವಿರ ಕೋಟಿ ರೂ. ಹೂಡಿಕೆಯು ಭೂಸ್ವಾಧೀನ, ಘಟಕ ಸ್ಥಾಪನೆ, ಯಂತ್ರೋಪಕರಣ ಹಾಗೂ ನಿರ್ಮಾಣವನ್ನು ಒಳಗೊಂಡಿದೆ. ಕರ್ನಾಟಕದಲ್ಲಿ ಈಗಾಗಲೇ ವಿದ್ಯುತ್‌ಚಾಲಿತ ಕಾರುಗಳು ಹಾಗೂ ದ್ವಿಚಕ್ರ ವಾಹನಗಳ ಖರೀದಿ ಹೆಚ್ಚಾಗಿದೆ. ಹಾಗಾಗಿ, ಲೀಥಿಯಂ ಬ್ಯಾಟರಿ ಉತ್ಪಾದನೆ ಘಟಕ ಸ್ಥಾಪನೆಯಾಗುತ್ತಿರುವುದು ಸಕಾರಾತ್ಮಕ ಬೆಳವಣಿಗೆ ಎಂದೇ ವಿಶ್ಲೇಷಿಸಲಾಗುತ್ತಿದೆ.

ಕ್ಷಣ ಕ್ಷಣದ ಮಾಹಿತಿಗಾಗಿ Vistara News FaceBook ಪೇಜ್ ಫಾಲೋ ಮಾಡಿ
ಮಹತ್ವದ ಮಾಹಿತಿಗಾಗಿ ವಿಸ್ತಾರ ನ್ಯೂಸ್ ಆ್ಯಪ್ ಉಚಿತವಾಗಿ ಡೌನ್ ಲೋಡ್ ಮಾಡಿಕೊಳ್ಳಿ: Andriod App | IOS App
Continue Reading
Click to comment

Leave a Reply

Your email address will not be published. Required fields are marked *

ಕರ್ನಾಟಕ

Prajwal Revanna Case: ವಕೀಲ ದೇವರಾಜೇಗೌಡಗೆ ಇನ್ನೂ 14 ದಿನ ಜೈಲೇ ಗತಿ; ನ್ಯಾಯಾಂಗ ಬಂಧನದ ಅವಧಿ ವಿಸ್ತರಣೆ

Prajwal Revanna Case: ಲೈಂಗಿಕ ದೌರ್ಜನ್ಯ ಹಾಗೂ ಅತ್ಯಾಚಾರ ಪ್ರಕರಣದಲ್ಲಿ ಬಂಧನವಾಗಿರುವ ವಕೀಲ ದೇವರಾಜೇಗೌಡಗೆ ಮತ್ತೆ 14 ದಿನ ನ್ಯಾಯಾಂಗ ಬಂಧನ ವಿಧಿಸಲಾಗಿದೆ.

VISTARANEWS.COM


on

Prajwal Revanna Case
Koo

ಹಾಸನ: ಲೈಂಗಿಕ ದೌರ್ಜನ್ಯ ಹಾಗೂ ಅತ್ಯಾಚಾರ ಪ್ರಕರಣದಲ್ಲಿ (Prajwal Revanna Case) ಬಂಧನವಾಗಿರುವ ವಕೀಲ ದೇವರಾಜೇಗೌಡಗೆ ವಿಧಿಸಿದ್ದ ನ್ಯಾಯಾಂಗ ಬಂಧನವನ್ನು ಮತ್ತೆ ವಿಸ್ತರಿಸಿದ್ದು, ಇನ್ನೂ 14 ದಿನ ಜೈಲೇ ಗತಿಯಾಗಿದೆ. ಜೂನ್ 7 ರವರೆಗೆ ನ್ಯಾಯಾಂಗ ಬಂಧನದ ಅವಧಿ ವಿಸ್ತರಣೆ ಮಾಡಿ ಹೊಳೆನರಸೀಪುರ ನ್ಯಾಯಾಲಯ ಆದೇಶ ಹೊರಡಿಸಿದೆ.

ದೇವರಾಜೇಗೌಡ ವಿರುದ್ಧ ಲೈಂಗಿಕ ದೌರ್ಜನ್ಯ ಹಾಗೂ ಅತ್ಯಾಚಾರ ಕೇಸ್ ಹಿನ್ನೆಲೆ ಮೇ‌ 11 ರಂದು ಐಪಿಸಿ ಸೆಕ್ಷೆನ್ 376 ಅಡಿ ಅತ್ಯಾಚಾರ ಕೇಸ್ ದಾಖಲಾಗಿತ್ತು. ಅದೇ ರೀತಿ ಏಪ್ರಿಲ್ 1 ರಂದು ಐಪಿಸಿ ಸೆಕ್ಷೆನ್ 354 A, 354 C, 448, 504,506 ಅಡಿ ದಾಖಲಾಗಿದ್ದ ಪ್ರಕರಣ ದಾಖಲಾಗಿತ್ತು. ಹೀಗಾಗಿ ಏಪ್ರಿಲ್ 10ರಂದು ಹಿರಿಯೂರಿನಲ್ಲಿ ದೇವರಾಜೇಗೌಡರನ್ನು ಬಂಧಿಸಲಾಗಿತ್ತು. ನಂತರ ಏಪ್ರಿಲ್ 11 ರಂದು ಹೊಳೆನರಸೀಪುರದ ನ್ಯಾಯಾಧೀಶರ ಮುಂದೆ ಹಾಜರು ಪಡಿಸಲಾಗಿತ್ತು. ಅವರಿಗೆ ಏಪ್ರಿಲ್ 24ರ ವರೆಗೂ ನ್ಯಾಯಾಂಗ ಬಂಧನ ವಿಧಿಸಲಾಗಿತ್ತು. ಈ ವೇಳೆ ಹೊಳೆನರಸೀಪುರ ಪೊಲೀಸರ ಕಸ್ಟಡಿಗೆ ನಾಲ್ಕು ದಿನ, ಎಸ್‌ಐಟಿ ಕಸ್ಟಡಿಗೆ ಮೂರು ದಿನ ನೀಡಲಾಗಿತ್ತು

14 ದಿನದ ನ್ಯಾಯಾಂಗ ಬಂಧನ ಮುಗಿದಿದ್ದರಿಂದ ಶುಕ್ರವಾರ ಹೊಳೆನರಸೀಪುರ ನ್ಯಾಯಾಲಯಕ್ಕೆ ನ್ಯಾಯಾಲಯಕ್ಕೆ ಹಾಜರುಪಡಿಸಲಾಗಿತ್ತು. ಇದೀಗ ಮತ್ತೆ 14 ದಿನ ನ್ಯಾಯಾಂಗ ಬಂಧನ ವಿಸ್ತರಿಸಲಾಗಿದೆ. ಇದೇ ತಿಂಗಳು 28ಕ್ಕೆ ನಡೆಯಲಿರುವ ಜಾಮೀನು ಅರ್ಜಿ ವಿಚಾರಣೆ ನಡೆಯಲಿದೆ.

ಇದನ್ನೂ ಓದಿ | Former DGP Arrested: ವಿಚ್ಛೇದಿತ ಪತ್ನಿಯ ದೂರು; ಮಾಜಿ ಡಿಜಿಪಿ ಜೈಲು ಪಾಲು

ವಕೀಲ ದೇವರಾಜೇಗೌಡ ಬಂಧನವಾಗಿರುವುದು ಲೈಂಗಿಕ ದೌರ್ಜನ್ಯ ಕೇಸ್‌ನಲ್ಲಾದರೂ ಹಾಸನ ಪೆನ್ ಡ್ರೈವ್ ಪ್ರಕರಣಕ್ಕೇ ತಳುಕು ಹಾಕಿಕೊಂಡಿದೆ. ಈಗಾಗಲೇ ಮಾಜಿ ಸಂಸದ ಶಿವರಾಮೇಗೌಡ ಹಾಗೂ ಡಿಸಿಎಂ ಡಿ.ಕೆ. ಶಿವಕುಮಾರ್‌ ವಿರುದ್ಧ ಗಂಭೀರ ಆರೋಪ ಮಾಡಿದ್ದಲ್ಲದೆ, ಅವರ ಜತೆಗಿನ ಮಾತುಕತೆ ಎನ್ನಲಾದ ಆಡಿಯೊವನ್ನು ಬಿಡುಗಡೆ ಮಾಡಿದ್ದರು. ಇದಲ್ಲದೆ, ಸಾಕಷ್ಟು ವಿಡಿಯೊಗಳು, ಸಾಕ್ಷಿಗಳು ಸಹ ತಮ್ಮ ಬಳಿ ಇದೆ ಎಂದು ಹೇಳಿಕೊಂಡಿದ್ದರು. ಸಾಕ್ಷ್ಯಗಳನ್ನು ಮುಂದಿನ ದಿನಗಳಲ್ಲಿ ಸಿಬಿಐ ಮುಂದೆ ಇಡುತ್ತೇನೆ ಎಂದು ಸಹ ಸುದ್ದಿಗೋಷ್ಠಿ ನಡೆಸಿ ನೇರವಾಗಿ ರಾಜ್ಯ ಸರ್ಕಾರದ ವಿರುದ್ಧ ಸವಾಲು ಹಾಕಿದ್ದರು. ಆದರೆ, ಹೊಳೆನರಸೀಪುರ ಠಾಣೆಯಲ್ಲಿ ದಾಖಲಾಗಿದ್ದ ಮಹಿಳೆ ಮೇಲೆ ಲೈಂಗಿಕ ದೌರ್ಜನ್ಯ ಕೇಸ್‌ನಲ್ಲಿ ಅವರನ್ನು ಬಂಧಿಸಲಾಗಿದೆ.

Continue Reading

ಕರ್ನಾಟಕ

Martin Movie: ಬಹುನೀರಿಕ್ಷಿತ ʼಮಾರ್ಟಿನ್ʼ ರಿಲೀಸ್ ಡೇಟ್ ಫಿಕ್ಸ್‌; 3 ವರ್ಷಗಳ ನಂತರ ತೆರೆಗೆ ಆ್ಯಕ್ಷನ್ ಪ್ರಿನ್ಸ್ ಎಂಟ್ರಿ

Martin Movie: ʼಮಾರ್ಟಿನ್ʼ ಸಿನಿಮಾ, ಆ್ಯಕ್ಷನ್-ಪ್ರಿನ್ಸ್ ಧ್ರುವ ಸರ್ಜಾ ಅಭಿನಯದ 5ನೇ ಚಿತ್ರವಾಗಿದ್ದು, ಕನ್ನಡ ಚಿತ್ರರಂಗದಲ್ಲಿ ಸಾಕಷ್ಟು ನಿರೀಕ್ಷೆ ಹುಟ್ಟು ಹಾಕಿದೆ.

VISTARANEWS.COM


on

Martin Movie
Koo

ಬೆಂಗಳೂರು: ಆ್ಯಕ್ಷನ್ ಪ್ರಿನ್ಸ್ ಧ್ರುವ ಸರ್ಜಾ ಅಭಿನಯದ ಬಹುನೀರಿಕ್ಷಿತ ʼಮಾರ್ಟಿನ್ʼ ಚಿತ್ರದ ರಿಲೀಸ್ ಡೇಟ್ ಫಿಕ್ಸ್‌ ಆಗಿದೆ. ಎ.ಪಿ. ಅರ್ಜುನ್ ನಿರ್ದೇಶನದ ʼಮಾರ್ಟಿನ್ʼ (Martin Movie) ಚಿತ್ರವು ಪ್ಯಾನ್ ಇಂಡಿಯಾ ಮಟ್ಟದಲ್ಲಿ ಪಂಚ ಭಾಷೆಗಳಲ್ಲಿ ಬಿಡುಗಡೆಯಾಗಲು ಸಜ್ಜುಗೊಂಡಿದ್ದು, ಅಕ್ಟೋಬರ್‌ 11ಕ್ಕೆ ತೆರೆಗೆ ಅಪ್ಪಲಿಸಲಿದೆ.

ಸಿಂಗಲ್‌ ಸ್ಕ್ರೀನ್‌ ಚಿತ್ರಮಂದಿರಗಳು ಬಂದ್‌ ಆಗಲಿವೆ ಎಂಬ ಸುದ್ದಿ ಹರಿದಾಡುತ್ತಿರುವ ನಡುವೆ ‘ಮಾರ್ಟಿನ್’ ಚಿತ್ರತಂಡ ಬಿಗ್ ಅನೌನ್ಸ್‌ಮೆಂಟ್ ಮಾಡಿದೆ. ಈ ಚಿತ್ರವು ಆ್ಯಕ್ಷನ್-ಪ್ರಿನ್ಸ್ ಧ್ರುವ ಸರ್ಜಾ ಅಭಿನಯದ 5ನೇ ಚಿತ್ರವಾಗಿದ್ದು, ಉದಯ್ ಕೆ.ಮೆಹ್ತಾ ಈ ಅದ್ಧೂರಿ ಸಿನಿಮಾ ನಿರ್ಮಾಣ ಮಾಡಿದ್ದಾರೆ.

ಸುಮಾರು ದಿನಗಳಿಂದ ಸಿ.ಜಿ ಕೆಲಸಗಳಲ್ಲಿ ನಿರತವಾಗಿದ್ದ ಮಾರ್ಟಿನ್ ಚಿತ್ರತಂಡ, ಇದೀಗ ರಿಲೀಸ್‌ ದಿನಾಂಕ ಘೋಷಣೆ ಮಾಡಿದೆ. ಪೊಗರು ಚಿತ್ರದ ಬಳಿಕ 3 ವರ್ಷಗಳ ನಂತರ ಧ್ರುವ ಸರ್ಜಾ ತೆರೆಗೆ ಎಂಟ್ರಿ ನೀಡುತ್ತಿದ್ದು, ಚಿತ್ರವು ಸಾಕಷ್ಟು ನಿರೀಕ್ಷೆ ಹುಟ್ಟು ಹಾಕಿದೆ.

ನಿರ್ದೇಶಕ ಎ.ಪಿ.ಅರ್ಜುನ್ ಮಾತನಾಡಿ, ರಿಲೀಸ್ ಯಾವಾಗ? ಯಾವಾಗ? ಅಂತ ಅಭಿಮಾನಿಗಳು ಕೇಳುತ್ತಿದ್ದರು. ಇದೀಗ ಫೈನಲ್‌ ರಿಲೀಸ್ ಡೇಟ್ ಅನೌನ್ಸ್ ಮಾಡಿದ್ದೇವೆ. ಅಕ್ಟೋಬರ್ 11ಕ್ಕೆ‌ ನಿಮ್ಮ ಮುಂದೆ ಬರುತ್ತೇವೆ. ನಾನು ಮಾತನಾಡಲ್ಲ, ನಮ್ಮ ಸಿನಿಮಾ ಮಾತನಾಡುತ್ತೆ. ಏನೇ ಸಮಸ್ಯೆ ಬಂದರೂ‌ ಒದ್ದಾಡಿ, ಗುದ್ಡಾಡಿ ಕೊನಗೂ ಸಿನಿಮಾ ಮುಗಿಸಿದ್ದೇವೆ. ತಮಿಳುನಾಡು, ಹೈದರಾಬಾದ್, ಕೇರಳ, ಮುಂಬೈಗೆ ಹೋಗಿ ಪ್ರಮೋಷನ್ ಮಾಡಲಿದ್ದೇವೆ. ನಿಮ್ಮೆಲ್ಲರ ಪ್ರೀತಿ, ಪ್ರೋತ್ಸಾಹ ಇರಲಿ. ನನ್ನ ಎಲ್ಲಾ ಸಿನಿಮಾಗಳನ್ನು ಮಗು ಥರ ಟ್ರೀಟ್ ಮಾಡ್ತೀನಿ, ಮಾರ್ಟಿನ್ ಆರನೇ ಸಿನಿಮಾ. ನನ್ನ ಪಾಲಿಗೆ ಇದು ಆರನೇ ಮಗು ಎಂದು ಹೇಳಿದರು.

ಮಾರ್ಟಿನ್ ಚಿತ್ರಕ್ಕೆ ಮಣಿ ಶರ್ಮಾ ಅವರ ಸಂಗೀತ ಮತ್ತು ಸತ್ಯ ಹೆಗಡೆ ಅವರ ಛಾಯಾಗ್ರಹಣವಿದೆ. ಈ ಸಿನಿಮಾದಲ್ಲಿ ಧ್ರುವ ಸರ್ಜಾ ಅವರಿಗೆ ವೈಭವಿ ಶಾಂಡಿಲ್ಯ ನಾಯಕಿಯಾಗಿ ನಟಿಸಿದ್ದಾರೆ. ಮಾರ್ಟಿನ್‌ ಸಿನಿಮಾದಲ್ಲಿ ಕನ್ನಡದ ಕಲಾವಿದರ ಜತೆಗೆ ಹಿಂದಿ, ತೆಲುಗು, ತಮಿಳು ಚಿತ್ರರಂಗದ ಕಲಾವಿದರು ನಟಿಸಿದ್ದಾರೆ. ಅಚ್ಯುತ್‌ ಕುಮಾರ್‌, ನಿಕಿತನ್‌ ಧೀರ್‌, ನವಾಬ್‌ ಶಾ ಸೇರಿದಂತೆ ಹಲವರು ಪ್ರಮುಖ ಪಾತ್ರಗಳಲ್ಲಿದ್ದಾರೆ. ‘ಧೀರನ್‌ ಅಧಿಕಾರಂ ಒಂಡ್ರು’ತಮಿಳು ಚಿತ್ರದ ಮೂಲಕ ಗಮನ ಸೆಳೆದಿದ್ದ ನಟ ರೋಹಿತ್‌ ಪಾಠಕ್‌ ಸಹ ‘ಮಾರ್ಟಿನ್‌’ನಲ್ಲಿ ಬಹು ಮುಖ್ಯ ಪಾತ್ರವೊಂದರಲ್ಲಿ ಕಾಣಿಸಿಕೊಳ್ಳುತ್ತಿದ್ದಾರೆ.

ಇದನ್ನೂ ಓದಿ | Crew on OTT: ಈ 5 ಕಾರಣಕ್ಕಾಗಿ ಟಬು, ಕರೀನಾ ನಟಿಸಿರುವ ʼಕ್ರ್ಯೂʼ ಸಿನಿಮಾ ನೋಡಬಹುದು

ಅದ್ಧೂರಿ ಬಜೆಟ್‌ ಮತ್ತು ಮೇಕಿಂಗ್‌ನಿಂದಾಗಿ ಸದ್ದು ಮಾಡಿರುವ ಸಿನಿಮಾ ‘ಮಾರ್ಟಿನ್ ಕ್ಲೈಮ್ಯಾಕ್ಸ್‌ನ ಆ್ಯಕ್ಷನ್‌ ದೃಶ್ಯಗಳಿಗೆ ರಾಮ್‌-ಲಕ್ಷ್ಮಣ್‌ ಮತ್ತು ರವಿವರ್ಮ ಸಾಹಸ ನಿರ್ದೇಶನ ಮಾಡಿದ್ದಾರೆ. ಇದೇ ಮೊದಲ ಬಾರಿಗೆ ಒಂದು ಸಿನಿಮಾದ ಕ್ಲೈಮ್ಯಾಕ್ಸ್‌ಗಾಗಿ ಮೂರು ಸಾಹಸ ನಿರ್ದೇಶಕರು ಕೆಲಸ ಮಾಡಿದ್ದಾರೆ ಎಂದು ಹೇಳಲಾಗುತ್ತಿದೆ.

ಸಾಲು ಸಾಲು ಸಿನಿಮಾಗಳಲ್ಲಿ ಧ್ರುವ ಬ್ಯುಸಿ

ನಿರ್ದೇಶಕ ಪ್ರೇಮ್‌ ಹಾಗೂ ಧ್ರುವ ಕಾಂಬಿನೇಶನ್‌ ಇರುವ ʻಕೆಡಿ’ ಸಿನಿಮಾ ಟೈಟಲ್ ಮೂಲಕ ಕ್ಯೂರಿಯಸ್ ಹುಟ್ಟು ಹಾಕಿದೆ. ಬಾಲಿವುಡ್‌ ನಟಿ ಶಿಲ್ಪಾ ಶೆಟ್ಟಿ ಸತ್ಯವತಿಯಾಗಿ ಎಂಟ್ರಿ ಕೊಟ್ಟಿದ್ದಾರೆ. ರೆಟ್ರೊ ಲುಕ್‌ನಲ್ಲಿ ಶಿಲ್ಪಾ ಶೆಟ್ಟಿ ಮಿಂಚಿದ್ದು, ಚೆಂದದ ಸೀರೆಯುಟ್ಟು ಉದ್ದದ ಜಡೆ ಮುಂದಕ್ಕೆ ಬಿಟ್ಟು, ಕೂಲಿಂಗ್ ಗ್ಲ್ಯಾಸ್ ಧರಿಸಿ ರಾಯಲ್ ಆಗಿ ಕಾಣಿಸಿಕೊಂಡಿದ್ದರು.ಈ ಹಿಂದೆ ಚಿತ್ರತಂಡ ರವಿಚಂದ್ರನ್ ಅವರ ಲುಕ್‌ ಹಂಚಿಕೊಂಡಿತ್ತು. ರವಿಚಂದ್ರನ್ ಅವರ ಸಿನಿಮಾ ಫಸ್ಟ್ ಲುಕ್‌ನಲ್ಲಿ ಹಣೆಯಲ್ಲಿ ವಿಭೂತಿ, ಕಪ್ಪು ಶರ್ಟ್ ಮತ್ತು ಪ್ಯಾಂಟ್‌ನಲ್ಲಿ ಖಡಕ್ ಆಗಿ ಕಾಣಿಸಿಕೊಂಡಿದ್ದರು. ತಮ್ಮ ಬಲಗಾಲಿನಲ್ಲಿ ಕಾರಿನ ಡೋರ್ ಓಪನ್ ಮಾಡಿ ಪೋಸ್ ಕೊಟ್ಟಿದ್ದರು. ಎಂದೂ ಕಾಣಿಸಿಕೊಂಡಿರದ ಲುಕ್‌ನಲ್ಲಿ ರವಿಚಂದ್ರನ್ ಮಿಂಚಿದ್ದರು. ಅಷ್ಟೇ ಅಲ್ಲದೇ ಧ್ರುವ ಸರ್ಜಾ ಅವರು 23 ದಿನಗಳಲ್ಲಿ 18 ಕೆಜಿ ತೂಕ ಇಳಿಸಿಕೊಂಡಿದ್ದರು.

ಧ್ರುವ ಸರ್ಜಾ ರೈನಾ ಎಂಬ ಸಿನಿಮಾವನ್ನು ಅನೌನ್ಸ್‌ ಮಾಡಿದ್ದಾರೆ. ಮಾಸ್ ಲುಕ್‌ನಲ್ಲಿ ಧ್ರುವ ಸರ್ಜಾ ಕಂಡಿದ್ದಾರೆ. ಶಿವಾರ್ಜುನ್ ನಿರ್ದೇಶನ ಹಾಗೂ ಉದಯ ಮೆಹ್ತಾ ನಿರ್ಮಾಣ ಈ ಚಿತ್ರಕ್ಕಿದೆ.

Continue Reading

ಕೊಪ್ಪಳ

MLC Election: ಕಾಂಗ್ರೆಸ್ ಎಂಬುದು ದೇಶದಲ್ಲಿ ರಿಜೆಕ್ಟೆಡ್, ಎಕ್ಸ್‌ಪೈರಿ ಗೂಡ್ಸ್: ಪ್ರಲ್ಹಾದ್ ಜೋಶಿ ಲೇವಡಿ

MLC Election: ಕಾಂಗ್ರೆಸ್ ಪಕ್ಷವನ್ನು ಜನ ನಿಧಾನವಾಗಿ ಮರೆತು ಹೋಗುತ್ತಿದ್ದಾರೆ. ಅಧಿಕಾರಕ್ಕೆ ಬರಲು ಸಾಧ್ಯವೇ ಇಲ್ಲದಂತ ಸ್ಥಿತಿ ನಿರ್ಮಾಣವಾಗಿರುವ ಕಾರಣಕ್ಕೆ ಹೇಗಾದರೂ ಮಾಡಿ ಅಧಿಕಾರಕ್ಕೆ ಬರಬೇಕು ಎಂಬ ದುರುದ್ದೇಶದಿಂದ ಈಡೇರಿಸಲು ಸಾಧ್ಯವಿಲ್ಲದಂತ ಗ್ಯಾರಂಟಿಗಳ ಆಶ್ವಾಸನೆ ನೀಡುತ್ತಿದೆ ಎಂದು ಎಂದು ಕೇಂದ್ರ ಸಚಿವ ಪ್ರಲ್ಹಾದ್ ಜೋಶಿ ಆರೋಪಿಸಿದ್ದಾರೆ.

VISTARANEWS.COM


on

Congress is rejected expired goods in the country says union minister Pralhad Joshi
Koo

ಗಂಗಾವತಿ: ಕಳೆದ ಒಂದು ದಶಕದಿಂದ ಲೋಕಸಭೆಯಲ್ಲಿ ವಿಪಕ್ಷ ಸ್ಥಾನದಲ್ಲಿ ಕೂರಲು ಅಗತ್ಯವಿರುವ ಸ್ಥಾನಗಳನ್ನೂ ಕಾಂಗ್ರೆಸ್ ಸಂಪಾದಿಸಿಕೊಳ್ಳಲು ಸಾಧ್ಯವಿಲ್ಲದಂತ ಸ್ಥಿತಿ ನಿರ್ಮಾಣವಾಗಿದೆ. ಹೀಗಾಗಿ ಕಾಂಗ್ರೆಸ್ (Congress) ಎಂಬುವುದು ದೇಶದಲ್ಲಿ ರಿಜೆಕ್ಟೆಡ್ ಮತ್ತು ಎಕ್ಸ್‌ಪೈರಿ ಗೂಡ್ಸ್‌ನಂತಾಗಿದೆ ಎಂದು ಕೇಂದ್ರ ಸಚಿವ ಪ್ರಲ್ಹಾದ್ ಜೋಶಿ (MLC Election) ಲೇವಡಿ ಮಾಡಿದರು.

ಈಶಾನ್ಯ ಪದವೀಧರ ಕ್ಷೇತ್ರದ ಚುನಾವಣೆ ಅಂಗವಾಗಿ ಇಲ್ಲಿನ ಚನ್ನಬಸವಸ್ವಾಮಿ ಕಲ್ಯಾಣ ಮಂಟಪದಲ್ಲಿ ಶುಕ್ರವಾರ ಬಿಜೆಪಿಯಿಂದ ಹಮ್ಮಿಕೊಳ್ಳಲಾಗಿದ್ದ ಸಭೆಯಲ್ಲಿ ಬಿಜೆಪಿ ಅಭ್ಯರ್ಥಿ ಅಮರನಾಥ ಪಾಟೀಲ್ ಪರ ಮತಯಾಚನೆ ಮಾಡಿ ಅವರು ಮಾತನಾಡಿದರು.

ಕಾಂಗ್ರೆಸ್ ಪಕ್ಷವನ್ನು ಜನ ನಿಧಾನವಾಗಿ ಮರೆತು ಹೋಗುತ್ತಿದ್ದಾರೆ. ಅಧಿಕಾರಕ್ಕೆ ಬರಲು ಸಾಧ್ಯವೇ ಇಲ್ಲದಂತ ಸ್ಥಿತಿ ನಿರ್ಮಾಣವಾಗಿರುವ ಕಾರಣಕ್ಕೆ ಹೇಗಾದರೂ ಮಾಡಿ ಅಧಿಕಾರಕ್ಕೆ ಬರಬೇಕು ಎಂಬ ದುರುದ್ದೇಶದಿಂದ ಈಡೇರಿಸಲು ಸಾಧ್ಯವಿಲ್ಲದಂತ ಗ್ಯಾರಂಟಿಗಳ ಆಶ್ವಾಸನೆ ನೀಡುತ್ತಿದೆ ಎಂದರು.

ಇದನ್ನೂ ಓದಿ: Bengaluru News: ಬೆಂಗಳೂರಿನಲ್ಲಿ ಮೇ 26ರಂದು ʼಭಾರತದ ಧೀರ ಚೇತನಗಳುʼ ಕೃತಿ ಲೋಕಾರ್ಪಣೆ

ರಾಯ್‌ಬರೇಲಿಯಂತ ಒಂದೇ ಒಂದು ಕ್ಷೇತ್ರದಲ್ಲಿ ಗೆಲುವು ಸಾಧಿಸಲು ಸೋನಿಯಾಗಾಂಧಿ, ಪ್ರಿಯಾಂಕಾ ವಾದ್ರಾ, ರಾಹುಲ್‌ಗಾಂಧಿ, ಮಲ್ಲಿಕಾರ್ಜುನ ಖರ್ಗೆ, ಡಿ.ಕೆ. ಶಿವಕುಮಾರ್‌ ಸೇರಿದಂತೆ ಪಕ್ಷದ ಹಲವು ಮುಖಂಡರು ಕ್ಷೇತ್ರದಲ್ಲಿ ಬೀಡು ಬಿಟ್ಟಿದ್ದಾರೆ. ಆದಾಗ್ಯೂ ಗೆಲವು ಅಷ್ಟು ಸುಲಭವಲ್ಲ. ಜನರಿಗೆ ಕಾಂಗ್ರೆಸ್ ಪಕ್ಷದ ಮನಸ್ಥಿತಿ ಅರ್ಥವಾಗಿದೆ.‌

ಕಳೆದ 60 ವರ್ಷಕಾಲ ಆಡಳಿತ ನೀಡಿದ ಸಂದರ್ಭದಲ್ಲಿ ಕಾಂಗ್ರೆಸ್‌ನ ದುರಾಡಳಿತ, ತುಷ್ಠೀಕರಣ, ಭ್ರಷ್ಟಾಚಾರ, ದೇಶದ ಸ್ಥಿತಿಯ ಬಗ್ಗೆ ಜನರಿಗೆ ಚನ್ನಾಗಿ ಅರ್ಥವಾಗಿದೆ. ಹೀಗಾಗಿ ಕಾಂಗ್ರೆಸ್ ಪಕ್ಷವನ್ನು ಜನ ನಿಧಾನವಾಗಿ ಮರೆಯುತ್ತಿದ್ದಾರೆ ಎಂದರು.

ಯುಪಿಎ ಸರ್ಕಾರದ ಹತ್ತು ವರ್ಷದ ಅವಧಿಯಲ್ಲಿ 12 ಲಕ್ಷ ಕೋಟಿ ರೂಪಾಯಿ ಮೊತ್ತದ ಭ್ರಷ್ಟಾಚಾರ ನಡೆದಿದೆ. ಮೋದಿ ಸರ್ಕಾರದ ಈ ಹತ್ತು ವರ್ಷದಲ್ಲಿ ಒಂದೇ ಒಂದು ರೂಪಾಯಿ ಅಕ್ರಮ ನಡೆದಿಲ್ಲ. ಆದರೆ ಕಾಂಗ್ರೆಸ್ ಸುಳ್ಳಿನ ಪ್ರಚಾರ ಮಾಡುತ್ತಿದೆ ಎಂದು ಆರೋಪಿಸಿದರು.

ಕ್ಷೇತ್ರದ ಮುಖ ನೋಡಿಲ್ಲ

ಶಾಸಕ ಜಿ. ಜನಾರ್ದನರೆಡ್ಡಿ ಮಾತನಾಡಿ, ಕಳೆದ ಆರು ವರ್ಷದಿಂದ ಈ ಕ್ಷೇತ್ರದ ಎಂಎಲ್ಸಿ ಕಾಂಗ್ರೆಸ್ ಪಕ್ಷದ ಚಂದ್ರಶೇಖರ್ ಪಾಟೀಲ್ ಮತದಾರರಿಗೆ ಮುಖ ತೋರಿಸಿಲ್ಲ. ಈ ಬಗ್ಗೆ ಪತ್ರಕರ್ತರು ಪ್ರಶ್ನಿಸಿದರೆ, `ಮುಖ ತೋರಿಸಬೇಕಾದ ಅಗತ್ಯವೇನಿದೆ..? ಮತಗಳನ್ನು ಹೇಗೆ ಪಡೆಯಬೇಕು ಎಂಬುವುದು ತಮಗೆ ಗೊತ್ತಿದೆ’ ಎಂದು ದರ್ಪದ ಮಾತುಗಳನ್ನು ಆಡಿದ್ದಾರೆ. ಶ್ರೀಮಂತಿಕೆಯ ಕುಟುಂಬದ ಹಿನ್ನೆಲೆಯ ದರ್ಪ ಚಂದ್ರಶೇಖರ್ ತೋರುತ್ತಿದ್ದಾರೆ ಎಂದು ಆರೋಪಿಸಿದರು.

ಇದನ್ನೂ ಓದಿ: Washing Machine Cleaning Tips: ವಾಷಿಂಗ್ ಮೆಷಿನ್ ಹೆಚ್ಚು ಬಾಳಿಕೆ ಬರಬೇಕೆ? ಈ ರೀತಿ ಸ್ವಚ್ಛಗೊಳಿಸಿ

ಜನರ ಮಧ್ಯೆಯೇ ಇದ್ದು, ಜನರ ಸಮಸ್ಯೆಗಳಿಗೆ ಸ್ಪಂದಿಸುವ ಸರಳ ವ್ಯಕ್ತಿತ್ವದ ಅಮರನಾಥ್ ಪಾಟೀಲ್‌ ಅವರಿಗೆ ಮತ ಹಾಕಬೇಕು. ಚಂದ್ರಶೇಖರ್ ಅವರಿಗೆ ಒಂದೇ ಒಂದು ಮತ ಹಾಕಬಾರದು ಎಂದು ಶಾಸಕ ಜಿ. ಜನಾರ್ದನರೆಡ್ಡಿ ಮನವಿ ಮಾಡಿದರು.

Continue Reading

ಉತ್ತರ ಕನ್ನಡ

Uttara Kannada News: ಸಾಂಕ್ರಾಮಿಕ ರೋಗಗಳ ಜಾಗೃತಿ ಮೂಡಿಸಲು ಯಲ್ಲಾಪುರ ತಹಸೀಲ್ದಾರ್ ಸೂಚನೆ

Uttara Kannada News: ಮಳೆಗಾಲ ಪ್ರಾರಂಭವಾಗುತ್ತಿದ್ದು, ಕಲುಷಿತ ನೀರಿನಿಂದ ಹರಡುವ ಸಾಂಕ್ರಾಮಿಕ ರೋಗಗಳ ಬಗ್ಗೆ ಸಾರ್ವಜನಿಕರಲ್ಲಿ ಜಾಗೃತಿ ಮೂಡಿಸಬೇಕು ಎಂದು ಯಲ್ಲಾಪುರ ತಹಸೀಲ್ದಾರ್ ತನುಜಾ ಟಿ. ಸವದತ್ತಿ ಅಧಿಕಾರಿಗಳಿಗೆ ಸೂಚನೆ ನೀಡಿದ್ದಾರೆ.

VISTARANEWS.COM


on

Yallapur Tehsildar Tanuja T savadatti instructed to create awareness about infectious diseases
Koo

ಯಲ್ಲಾಪುರ: ಮಳೆಗಾಲ ಪ್ರಾರಂಭವಾಗುತ್ತಿದ್ದು, ಕಲುಷಿತ ನೀರಿನಿಂದ ಹರಡುವ ಸಾಂಕ್ರಾಮಿಕ ರೋಗಗಳ (infectious diseases) ಬಗ್ಗೆ ಸಾರ್ವಜನಿಕರಲ್ಲಿ ಜಾಗೃತಿ ಮೂಡಿಸಬೇಕು ಎಂದು ತಹಸೀಲ್ದಾರ್ ತನುಜಾ ಟಿ ಸವದತ್ತಿ (Uttara Kannada News) ಹೇಳಿದರು.

ಶುಕ್ರವಾರ ಮಿನಿ ವಿಧಾನಸೌಧದಲ್ಲಿ ಸಾಂಕ್ರಾಮಿಕ ಕಾಯಿಲೆಗಳ ನಿಯಂತ್ರಣ ಕುರಿತು ಇಲಾಖೆಗಳ ಸಮನ್ವಯ ಸಮಿತಿ ಸಭೆಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು.

ಶುದ್ಧ ಕುಡಿಯುವ ನೀರು ಮತ್ತು ನೈರ್ಮಲ್ಯ ನಿರ್ವಹಣೆ ತುರ್ತು ಅವಶ್ಯಕತೆಯಾಗಿದೆ. ಗ್ರಾಮ ಪಂಚಾಯಿತಿ ಮತ್ತು ಪಟ್ಟಣ ಪಂಚಾಯಿತಿಗಳು ತಮ್ಮ ವ್ಯಾಪ್ತಿಯಲ್ಲಿ ಕುಡಿಯುವ ನೀರಿನ ಟ್ಯಾಂಕ್‌ಗಳನ್ನು ಬ್ಲೀಚಿಂಗ್ ಪೌಂಡರ್ ಬಳಸಿ ಸ್ವಚ್ಛಗೊಳಿಸುವುದು, ಕುಡಿಯುವ ನೀರು ಕಲುಷಿತವಾಗದಂತೆ ಪೂರೈಕೆ ವ್ಯವಸ್ಥೆಯಲ್ಲಿ ಸೋರುವಿಕೆಗಳನ್ನು ಗುರುತಿಸಿ ತಕ್ಷಣ ದುರಸ್ತಿಗೊಳಿಸಬೇಕು. ಡೆಂಗ್ಯೂ, ಚಿಕುನ್‌ಗುನ್ಯ, ಮಲೇರಿಯಾ, ಆನೆಕಾಲುರೋಗ, ಮೆದುಳು ಜ್ವರಗಳ ಬಗ್ಗೆ ಕ್ಷೇತ್ರ ಮಟ್ಟದಲ್ಲಿ ಆಶಾ ಹಾಗೂ ಅಂಗನವಾಡಿ ಕಾರ್ಯಕರ್ತೆಯರು ಮಾಹಿತಿ ನೀಡಬೇಕು ಎಂದು ಸೂಚಿಸಿದರು.

ಇದನ್ನೂ ಓದಿ: Indian 2: ಜು.12ಕ್ಕೆ ಕಮಲ್ ಹಾಸನ್ ಅಭಿನಯದ ‘ಇಂಡಿಯನ್ 2’ ಚಿತ್ರ ರಿಲೀಸ್‌

ತಾಲೂಕು ಆರೋಗ್ಯಾಧಿಕಾರಿ ಡಾ. ನರೇಂದ್ರ ಪವಾರ ಮಾತನಾಡಿ, ಕಲುಷಿತ ನೀರಿನಿಂದ ವಾಂತಿ, ಭೇದಿ, ಅತಿಸಾರ ಭೇದಿ, ಕಾಲರಾ, ಕರುಳು ಬೇನೆ, ಕಾಮಾಲೆ ರೋಗಗಳು ಕಾಣಿಸಿಕೊಳ್ಳುವ ಸಂಭವ ಇರುತ್ತದೆ. ಈ ಹಿನ್ನೆಲೆಯಲ್ಲಿ ಸಾರ್ವಜನಿಕರು ಕಾಯಿಸಿ ಆರಿಸಿದ ನೀರನ್ನೇ ಕುಡಿಯುವುದು ಸೂಕ್ತ. ಇಲಾಖಾ ಸಿಬ್ಬಂದಿಗಳು ಮನೆ ಭೇಟಿ ನೀಡಿದಾಗ ಜ್ವರ ಮತ್ತು ಇತರೆ ಕಾಯಿಲೆಗಳಿದ್ದರೆ ಸರಿಯಾಗಿ ಮಾಹಿತಿ ನೀಡಬೇಕು ಎಂದ ಅವರು, ಓ.ಆರ್.ಎಸ್. ತಯಾರಿಸಿ ಬಳಸುವ ವಿಧಾನ, ಸೊಳ್ಳೆ ನಿಯಂತ್ರಣ, ವೈಯಕ್ತಿಕ ಸ್ವಚ್ಛತೆ, ಮನೆಯ ಸುತ್ತಮುತ್ತ ಶುಚಿತ್ವ ಕಾಪಾಡಿಕೊಳ್ಳುವ ಕುರಿತು ಸಾರ್ವಜನಿಕರು ಜಾಗೃತಿ ವಹಿಸಬೇಕು ಎಂದರು.

ಸಾಂಕ್ರಾಮಿಕ ರೋಗಗಳ ನಿಯಂತ್ರಣದಲ್ಲಿ ಎಲ್ಲ ಇಲಾಖೆಗಳ ಸಹಕಾರ ಮತ್ತು ಸಮನ್ವಯತೆ ಬಹಳ ಮುಖ್ಯವಾಗಿದೆ. ಪ್ರಾಥಮಿಕ ಆರೋಗ್ಯ ಕೇಂದ್ರಗಳ ವ್ಯಾಪ್ತಿಯಲ್ಲಿ ಕ್ಷಿಪ್ರ ಪ್ರತಿಕ್ರಿಯಾ ತಂಡ ರಚಿಸಲಾಗಿದ್ದು ಯಾವುದೇ ಗ್ರಾಮದಲ್ಲಿ ಹೆಚ್ಚಿನ ಸಂಖ್ಯೆಯಲ್ಲಿ ಕಾಯಿಲೆಗಳು ಕಂಡು ಬಂದರೆ ಅಲ್ಲಿಯೇ ಚಿಕಿತ್ಸೆ ನೀಡಲಾಗುತ್ತದೆ ಎಂದು ತಿಳಿಸಿದರು.

ಇದೇ ಸಂದರ್ಭದಲ್ಲಿ ನಡೆದ ಲಸಿಕಾ ಕಾರ್ಯಪಡೆಯ ಸಭೆಯಲ್ಲಿ ಮಾತನಾಡಿದ ಜಿಲ್ಲಾ ಆರ್‌.ಸಿ.ಎಚ್.‌ ಅಧಿಕಾರಿ ಡಾ. ನಟರಾಜ್‌ ಕೆ., ಯಾವುದೇ ಮಗು ಲಸಿಕೆಯಿಂದ ವಂಚಿತವಾಗದಂತೆ ನೋಡಿಕೊಳ್ಳಬೇಕು. ಲಸಿಕೆಯಿಂದ ತಡೆಗಟ್ಟಬಹುದಾದ ರೋಗಗಳಲ್ಲಿ ದಡಾರ ಕೂಡ ಒಂದಾಗಿದ್ದು, ದಡಾರ ನಿರ್ಮೂಲನೆಗೆ ಗುರಿ ಹಾಕಿಕೊಳ್ಳಲಾಗಿದೆ ಎಂದು ತಿಳಿಸಿದರು.

ಇದನ್ನೂ ಓದಿ: Washing Machine Cleaning Tips: ವಾಷಿಂಗ್ ಮೆಷಿನ್ ಹೆಚ್ಚು ಬಾಳಿಕೆ ಬರಬೇಕೆ? ಈ ರೀತಿ ಸ್ವಚ್ಛಗೊಳಿಸಿ

ಸಭೆಯಲ್ಲಿ ಬಿಪಿಎಂ ಎಸ್‌.ಎಸ್‌. ಪಾಟೀಲ್‌ ಸೇರಿದಂತೆ ವಿವಿಧ ಇಲಾಖೆಯ ಅಧಿಕಾರಿಗಳು ಉಪಸ್ಥಿತರಿದ್ದರು. ಹಿರಿಯ ಆರೋಗ್ಯ ನಿರೀಕ್ಷಣಾಧಿಕಾರಿ ಮಹೇಶ ತಾಳಿಕೋಟೆ ಸ್ವಾಗತಿಸಿದರು. ಕ್ಷೇತ್ರ ಆರೋಗ್ಯ ಶಿಕ್ಷಣಾಧಿಕಾರಿ ಎಸ್‌.ಟಿ. ಭಟ್ಟ ವಂದಿಸಿದರು.

Continue Reading
Advertisement
Kangana Ranaut
ದೇಶ56 mins ago

Kangana Ranaut: ಈ ಗುಲಾಬಿಯು ನಿಮಗಾಗಿ; ಮೋದಿಗೆ ಕೆಂಪು ಗುಲಾಬಿ ಕೊಟ್ಟು ಸ್ವಾಗತಿಸಿದ ಕಂಗನಾ! Photo ಇದೆ

T20 World Cup 2024
ಕ್ರೀಡೆ56 mins ago

T20 World Cup 2024: ಕೊನೆಗೂ ಟಿ20 ವಿಶ್ವಕಪ್​ಗೆ ತಂಡ ಪ್ರಕಟಿಸಿದ ಭಾರತದ ಬದ್ಧ ಎದುರಾಳಿ ಪಾಕಿಸ್ತಾನ

Prajwal Revanna Case
ಕರ್ನಾಟಕ1 hour ago

Prajwal Revanna Case: ವಕೀಲ ದೇವರಾಜೇಗೌಡಗೆ ಇನ್ನೂ 14 ದಿನ ಜೈಲೇ ಗತಿ; ನ್ಯಾಯಾಂಗ ಬಂಧನದ ಅವಧಿ ವಿಸ್ತರಣೆ

Yuzvendra Chahal
ಕ್ರಿಕೆಟ್1 hour ago

Yuzvendra Chahal: ಸಿಕ್ಸರ್​ ಹೊಡೆಸಿಕೊಂಡು ಐಪಿಎಲ್​ನಲ್ಲಿ ಕೆಟ್ಟ ದಾಖಲೆ ಬರೆದ ಚಹಲ್​

Lok Sabha Election
ದೇಶ1 hour ago

Lok Sabha Election: ನಾಳೆ 6ನೇ ಹಂತದಲ್ಲಿ 58 ಕ್ಷೇತ್ರಗಳಿಗೆ ಮತದಾನ; ಖಟ್ಟರ್‌, ಕನ್ಹಯ್ಯ ಸೇರಿ ಹಲವರ ಭವಿಷ್ಯ ನಿರ್ಧಾರ

Martin Movie
ಕರ್ನಾಟಕ2 hours ago

Martin Movie: ಬಹುನೀರಿಕ್ಷಿತ ʼಮಾರ್ಟಿನ್ʼ ರಿಲೀಸ್ ಡೇಟ್ ಫಿಕ್ಸ್‌; 3 ವರ್ಷಗಳ ನಂತರ ತೆರೆಗೆ ಆ್ಯಕ್ಷನ್ ಪ್ರಿನ್ಸ್ ಎಂಟ್ರಿ

Congress is rejected expired goods in the country says union minister Pralhad Joshi
ಕೊಪ್ಪಳ2 hours ago

MLC Election: ಕಾಂಗ್ರೆಸ್ ಎಂಬುದು ದೇಶದಲ್ಲಿ ರಿಜೆಕ್ಟೆಡ್, ಎಕ್ಸ್‌ಪೈರಿ ಗೂಡ್ಸ್: ಪ್ರಲ್ಹಾದ್ ಜೋಶಿ ಲೇವಡಿ

Yallapur Tehsildar Tanuja T savadatti instructed to create awareness about infectious diseases
ಉತ್ತರ ಕನ್ನಡ2 hours ago

Uttara Kannada News: ಸಾಂಕ್ರಾಮಿಕ ರೋಗಗಳ ಜಾಗೃತಿ ಮೂಡಿಸಲು ಯಲ್ಲಾಪುರ ತಹಸೀಲ್ದಾರ್ ಸೂಚನೆ

Phalodi Satta Bazar
ದೇಶ2 hours ago

Phalodi Satta Bazar: ಚುನಾವಣೆಯಲ್ಲಿ ಮೋದಿ ಹ್ಯಾಟ್ರಿಕ್ ಖಚಿತ; ಸಟ್ಟಾ ಬಜಾರ್‌ ಸಮೀಕ್ಷಾ ವರದಿ ಇಲ್ಲಿದೆ

Sara Tendulkar
ಕ್ರಿಕೆಟ್2 hours ago

Sara Tendulkar: ಲಂಡನ್​ ಯೂನಿವರ್ಸಿಟಿಯಿಂದ ಪದವಿ ಪಡೆದ ಸಾರಾ ತೆಂಡೂಲ್ಕರ್​; ಮಗಳ ಸಾಧನೆ ಕೊಂಡಾಡಿದ ಸಚಿನ್​

Sharmitha Gowda in bikini
ಕಿರುತೆರೆ8 months ago

Geetha Serial Kannada: ನಿದ್ದೆ ಕದ್ದ ಚೋರಿ! ನಟಿ `ಭಾನುಮತಿ’ ಹಾಟ್‌ ಪೋಟೊಗಳಿಗೆ ಫ್ಯಾನ್ಸ್ ಫುಲ್ ಫಿದಾ

Kannada Serials
ಕಿರುತೆರೆ7 months ago

Kannada Serials TRP: 2ನೇ ಸ್ಥಾನದಲ್ಲಿ 2 ಧಾರಾವಾಹಿಗಳು; ಟಿಆರ್‌ಪಿ ರೇಸ್‌ನಲ್ಲಿಲ್ಲ ಭಾಗ್ಯಲಕ್ಷ್ಮೀ!

Bigg Boss- Saregamapa 20 average TRP
ಕಿರುತೆರೆ7 months ago

Kannada Serials TRP: ಏಳನೇ ಸ್ಥಾನಕ್ಕೆ ʻಅಮೃತಧಾರೆʼ ಕುಸಿತ; ಬಿಗ್‌ ಬಾಸ್‌-ಸರಿಗಮಪ ಟಿಆರ್‌ಪಿ ಎಷ್ಟು?

galipata neetu
ಕಿರುತೆರೆ6 months ago

Kanyadana Serial: ಕಿರುತೆರೆಗೆ ಮತ್ತೆ ಎಂಟ್ರಿ ಕೊಟ್ಟ ʻಗಾಳಿಪಟʼ ಖ್ಯಾತಿಯ ʻನೀತುʼ!

Kannada Serials
ಕಿರುತೆರೆ8 months ago

Kannada Serials TRP: ನಾಲ್ಕನೇ ಸ್ಥಾನಕ್ಕೆ ಕುಸಿತ ಕಂಡ ʻಸೀತಾ ರಾಮʼ; ಟಿಆರ್‌ಪಿ ರೇಸ್‌ಗೆ ʻಭಾಗ್ಯಲಕ್ಷ್ಮಿʼ ಬ್ಯಾಕ್‌!

Kannada Serials
ಕಿರುತೆರೆ8 months ago

Kannada Serials TRP: ಟಿಆರ್‌ಪಿಯಲ್ಲಿ ʻಭಾಗ್ಯಲಕ್ಷ್ಮೀʼ ಹವಾ; ʻಪುಟ್ಟಕ್ಕನ ಮಕ್ಕಳುʼ ಧಾರಾವಾಹಿಗೆ ಸಂಕಷ್ಟ!

Bigg Boss' dominates TRP; Sita Rama fell to the sixth position
ಕಿರುತೆರೆ7 months ago

Kannada Serials TRP: ಟಿಆರ್‌ಪಿಯಲ್ಲಿ ʻಬಿಗ್ ಬಾಸ್ʼದೇ ಮೇಲುಗೈ; 6ನೇ ಸ್ಥಾನಕ್ಕೆ ಕುಸಿದ ʻಸೀತಾ ರಾಮʼ

geetha serial Dhanush gowda engagement
ಕಿರುತೆರೆ5 months ago

Dhanush Gowda: ಗೀತಾ ಧಾರಾವಾಹಿ ನಟನ ನಿಶ್ಚಿತಾರ್ಥ; ಭವ್ಯಾಳ ಕಮೆಂಟ್‌ ಬಾಕ್ಸ್‌ ಆಫ್‌!

varun
ಕಿರುತೆರೆ6 months ago

Brindavana Serial: ʼಬೃಂದಾವನʼ ಧಾರಾವಾಹಿಯಲ್ಲಿ ದೊಡ್ಡ ಟ್ವಿಸ್ಟ್‌; ಪ್ರಮುಖ ಪಾತ್ರಧಾರಿಯೇ ಬದಲು

Kannada Serials
ಕಿರುತೆರೆ8 months ago

Kannada Serials TRP: ಟಿಆರ್‌ಪಿಯಲ್ಲಿ ಏರಿಕೆ ಕಂಡ ʻಅಮೃತಧಾರೆʼ; ʻಗಟ್ಟಿಮೇಳʼಕ್ಕೆ ನಾಲ್ಕನೇ ಸ್ಥಾನ!

dina bhavishya read your daily horoscope predictions for May 23 2024
ಭವಿಷ್ಯ2 days ago

Dina Bhavishya : 12 ರಾಶಿಯವರ ಇಂದಿನ ಭವಿಷ್ಯ ಹೇಗಿದೆ? ಯಾರಿಗೆ ಶುಭ, ಯಾರಿಗೆ ಅಶುಭ ಫಲ?

Karnataka Weather Forecast
ಮಳೆ3 days ago

Karnataka Weather : ಮುಂದುವರಿಯಲಿದೆ ವರುಣಾರ್ಭಟ; ಬೆಂಗಳೂರಲ್ಲೂ ಭಾರಿ ಮಳೆ ನಿರೀಕ್ಷೆ!

Karnataka Rain
ಮಳೆ3 days ago

Karnataka Rain : ಭಾರಿ ಮಳೆಗೆ ಕರೆಂಟ್‌ ಕಟ್‌, ಕತ್ತಲಲ್ಲೇ ರೋಗಿಗಳಿಗೆ ಟ್ರೀಟ್‌ಮೆಂಟ್‌; ಮರ ಬಿದ್ದರೂ ಪಾರಾದ ತಾಯಿ-ಮಗ

Love Case Father throws hot water on man who loved his daughter for coming home
ಕೊಡಗು3 days ago

Love Case : ಮನೆಗೆ ಬಂದ ಪ್ರೇಮಿಗೆ ಕೊತ ಕೊತ ಕುದಿಯುವ ನೀರು ಎರಚಿದ ಯುವತಿ ತಂದೆ!

Contaminated Water
ಮೈಸೂರು3 days ago

Contaminated Water : ಡಿ ಸಾಲುಂಡಿಯಲ್ಲಿ ಕಲುಷಿತ ನೀರು ಸೇವಿಸಿ ಅಸ್ವಸ್ಥಗೊಂಡಿದ್ದ ಯುವಕ ಸಾವು

Karnataka Rain
ಮಳೆ4 days ago

Karnataka Rain : ಬಂಗಾಳ ಕೊಲ್ಲಿಯಲ್ಲಿ ವಾಯುಭಾರ ಕುಸಿತ; ಸಮುದ್ರಕ್ಕಿಳಿಯದಂತೆ ಮೀನುಗಾರರಿಗೆ ಎಚ್ಚರಿಕೆ

Karnataka Rain
ಮಳೆ5 days ago

Karnataka Rain : ಒಂದೇ ಮಳೆಗೆ ಹೊಳೆಯಂತಾದ ಬೆಂಗಳೂರು ರಸ್ತೆಗಳು! ಕಳಸದಲ್ಲೂ ಮುಂದುವರಿದ ಅಬ್ಬರ

Karnataka rain
ಮಳೆ5 days ago

Karnataka Rain : ವಿಜಯನಗರದಲ್ಲಿ ಸಿಡಿಲಿಗೆ ಜಾನುವಾರು ಬಲಿ; ಬೆಂಗಳೂರು ಸೇರಿ ಹಲವೆಡೆ ಭಾರಿ ಮಳೆ

Karnataka Rain
ಮಳೆ5 days ago

Karnataka Rain: ಧಾರಾಕಾರ ಮಳೆಗೆ ಕಾಂಪೌಂಡ್ ಕುಸಿದು 4 ಬೈಕ್‌ಗಳು ಜಖಂ; ಮದುವೆ ಮಂಟಪಕ್ಕೆ ನುಗ್ಗಿದ ನೀರು‌

Prajwal Revanna Case JDS calls CD Shivakumar pen drive gang
ರಾಜಕೀಯ1 week ago

Prajwal Revanna Case: CD ಶಿವಕುಮಾರ್ ಪೆನ್ ಡ್ರೈವ್ ಗ್ಯಾಂಗ್ ಎಂದ ಕುಟುಕಿದ ಜೆಡಿಎಸ್‌!

ಟ್ರೆಂಡಿಂಗ್‌