Lok Sabha: ಲೋಕಸಭೆಯಲ್ಲಿ ದಿಲ್ಲಿ ಸರ್ವೀಸ್ ಬಿಲ್ ಪಾಸ್! ಆಪ್‌ಗೆ ಭಾರೀ ಹಿನ್ನಡೆ, ಪ್ರತಿ ಪಕ್ಷಗಳು ವಾಕೌಟ್ - Vistara News

ದೇಶ

Lok Sabha: ಲೋಕಸಭೆಯಲ್ಲಿ ದಿಲ್ಲಿ ಸರ್ವೀಸ್ ಬಿಲ್ ಪಾಸ್! ಆಪ್‌ಗೆ ಭಾರೀ ಹಿನ್ನಡೆ, ಪ್ರತಿ ಪಕ್ಷಗಳು ವಾಕೌಟ್

Lak Sabha: ದಿಲ್ಲಿ ನಾಗರಿಕ ಸೇವೆಗಳಿಗೆ ಸಂಬಂಧಿಸಿದ ಕಾಯ್ದೆಯ ತಿದ್ದುಪಡಿ ವಿಧೇಯಕಕ್ಕೆ ಲೋಕಸಭೆ ಗುರುವಾರ ತನ್ನ ಒಪ್ಪಿಗೆ ನೀಡಿದೆ.

VISTARANEWS.COM


on

Amit Shah in Lok Sabha
ಮಹತ್ವದ, ಕುತೂಹಲಕರ ಸುದ್ದಿಗಾಗಿ ಫಾಲೊ ಮಾಡಿ
Koo

ನವದೆಹಲಿ: ಆಮ್ ಆದ್ಮಿ ಪಾರ್ಟಿ (Aam Aadmi Party) ಸೇರಿದಂತೆ ಪ್ರತಿಪಕ್ಷಗಳ (Opposition Party) ತೀವ್ರ ವಿರೋಧದ ನಡುವೆಯೇ ದಿಲ್ಲಿ ಸೇವೆಗಳ ಮೇಲೆ ಕೇಂದ್ರ ಸರ್ಕಾರಕ್ಕೆ ನಿಯಂತ್ರಣ ಒದಗಿಸುವ, ‘2023ರ ದೆಹಲಿಯ ರಾಷ್ಟ್ರೀಯ ರಾಜಧಾನಿ ಪ್ರದೇಶ (ತಿದ್ದುಪಡಿ) ವಿಧೇಯಕ’ವನ್ನು (Delhi Services Bill) ಸರ್ಕಾರವು ಲೋಕಸಭೆಯಲ್ಲಿ (Lok Sabha) ಪಾಸು ಮಾಡಿಕೊಂಡಿದೆ. ಈ ವಿಧೇಯಕ ಕುರಿತು ಇಡೀ ದಿನ ಚರ್ಚೆ ನಡೆದ ಬಳಿಕ, ಅಂಗೀಕರಿಸಲಾಯಿತು. ಈ ಮಧ್ಯೆ, ಪ್ರತಿಪಕ್ಷಗಳು ಲೋಕಸಭೆ ಕಲಾಪವನ್ನು ಬಹಿಷ್ಕರಿಸಿ ಹೊರ ನಡೆದವು. ಚರ್ಚೆಯ ವೇಳೆ, ಆಡಳಿತ ಮತ್ತು ಪ್ರತಿಪಕ್ಷಗಳ ನಡುವೆ ತೀವ್ರ ವಾಗ್ವಾದ ಕೂಡ ನಡೆಯಿತು. ಈ ವೇಳೆ, ಆಪ್‌ನ ಒಬ್ಬ ಸಂಸದನನ್ನು ಅಮಾನತು ಮಾಡಲಾಯಿತು.

ರಾಷ್ಟ್ರ ರಾಜಧಾನಿ ಕುರಿತು ಯಾವುದೇ ಕಾನೂನು ಮಾಡುವ ಹಕ್ಕು ಸಂಸತ್ತಿಗೆ ಎಂದು ಸುಪ್ರೀಂ ಕೋರ್ಟ್‌ನ ಆದೇಶದಲ್ಲಿ ಉಲ್ಲೇಖಿಸಲಾಗಿದೆ. ದೆಹಲಿಗೆ ಪ್ರತ್ಯೇಕ ಕಾನೂನು ಮಾಡುವ ಅಧಿಕಾರವನ್ನು ಸಂವಿಧಾನವೇ ನೀಡಿದೆ ಎಂದು ‘2023ರ ದೆಹಲಿಯ ರಾಷ್ಟ್ರೀಯ ರಾಜಧಾನಿ ಪ್ರದೇಶ (ತಿದ್ದುಪಡಿ) ವಿಧೇಯಕ’ವನ್ನು ಉಲ್ಲೇಖಿಸಿ ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರು ಚರ್ಚೆಯ ವೇಳೆ ಹೇಳಿದರು.

ಲೋಕಸಭೆಯು ಈ ವಿಧೇಯಕವನ್ನು ಅಂಗೀಕರಿಸುವ ಮೊದಲು ಟ್ವೀಟ್ ಮಾಡಿದ ದಿಲ್ಲಿ ಸಿಎಂ ಅರವಿಂದ್ ಕೇಜ್ರಿವಾಲ್ ಅವರು, ಈ ವಿಧೇಯಕವು ದಿಲ್ಲಿ ಜನರನ್ನು ಗುಲಾಮರನ್ನಾಗಿ ಮಾಡುತ್ತದೆ ಎಂದು ಆರೋಪಿಸಿದರು.

ದಿಲ್ಲಿ ಜನರ ಹಕ್ಕುಗಳನ್ನು ಕಸಿದುಕೊಳ್ಳುವ ವಿಧೇಯಕದ ಕುರಿತು ಇಂದು ಲೋಕಸಭೆಯಲ್ಲಿ ಅಮಿತ್ ಶಾ ಅವರು ಮಾತನಾಡುವುದನ್ನು ನಾನು ಕೇಳಿದ್ದೇನೆ. ವಿಧೇಯಕವನ್ನು ಬೆಂಬಲಿಸಲು ಅವರಲ್ಲಿ ಒಂದೇ ಒಂದು ಮಾನ್ಯ ಮಾಡಹುದಾದ ವಾದವಿಲ್ಲ. ಅವರು ತಪ್ಪು ಮಾಡುತ್ತಿದ್ದಾರೆ ಎಂದು ಅವರಿಗೂ ತಿಳಿದಿದೆ. ವಿಧೇಯಕವು ದಿಲ್ಲಿ ಜನರನ್ನು ಗುಲಾಮರನ್ನಾಗಿ ಮಾಡುವ ಮಸೂದೆಯಾಗಿದೆ. ಇದು ಅವರನ್ನು ಅಸಹಾಯಕರನ್ನಾಗಿ ಮಾಡುವ ವಿಧೇಯಕವಾಗಿದೆ. INDIA ಇದನ್ನು ಎಂದಿಗೂ ಮಾಡಲು ಬಿಡುವುದಿಲ್ಲ ಎಂದು ಕೇಜ್ರಿವಾಲ್ ವಿಧೇಯಕವನ್ನು ಅಂಗೀಕರಿಸುವ ಮೊದಲು ಹಿಂದಿಯಲ್ಲಿ ಟ್ವೀಟ್ ಮಾಡಿದ್ದಾರೆ.

ಈ ಸುದ್ದಿಯನ್ನೂ ಓದಿ: Opposition Meet: ಕೇಂದ್ರದ ‘ದಿಲ್ಲಿ ಸುಗ್ರೀವಾಜ್ಞೆ’ಗೆ ಕಾಂಗ್ರೆಸ್ ವಿರೋಧ; ಖುಷಿಯಾದ ಆಪ್!

ದಿಲ್ಲಿಯಲ್ಲಿ ಎ ದರ್ಜೆ ಅಧಿಕಾರಿಗಳನ್ನು ವರ್ಗಾವಣೆ ಮಾಡುವ ಅಧಿಕಾರವು ರಾಜ್ಯ ಸರ್ಕಾರಕ್ಕೆ ಇದೆ ಎಂದು ಸುಪ್ರೀಂ ಕೋರ್ಟ್ ಆದೇಶ ನೀಡಿತ್ತು. ಈ ಹಿನ್ನೆಲೆಯಲ್ಲಿ ಕೇಂದ್ರ ಸರ್ಕಾರವು ಸುಗ್ರೀವಾಜ್ಞೆ ಜಾರಿಗೆ ತಂದು, ಆ ಅಧಿಕಾರವನ್ನು ತನ್ನಲ್ಲೇ ಉಳಸಿಕೊಂಡಿತ್ತು. ಅದೇ ಸುಗ್ರೀವಾಜ್ಞೆಯನ್ನು ಇದೀಗ ಕಾಯ್ದೆಯಾಗಿ ಜಾರಿ ಮಾಡಲಾಗುತ್ತಿದೆ. ಕೇಂದ್ರ ಸರ್ಕಾರದ ಈ ನಿರ್ಧಾರವನ್ನು ಆಪ್ ಸರ್ಕಾರವು ಸುಪ್ರೀಂ ಕೋರ್ಟ್‌ನಲ್ಲಿ ಪ್ರಶ್ನಿಸಿದ್ದು, ವಿಚಾರಣೆ ನಡೆಯುತ್ತಿದೆ.

ದೇಶದ ಇನ್ನಷ್ಟು ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ.

ಕ್ಷಣ ಕ್ಷಣದ ಮಾಹಿತಿಗಾಗಿ Vistara News FaceBook ಪೇಜ್ ಫಾಲೋ ಮಾಡಿ
ಮಹತ್ವದ ಮಾಹಿತಿಗಾಗಿ ವಿಸ್ತಾರ ನ್ಯೂಸ್ ಆ್ಯಪ್ ಉಚಿತವಾಗಿ ಡೌನ್ ಲೋಡ್ ಮಾಡಿಕೊಳ್ಳಿ: Andriod App | IOS App
Continue Reading
Click to comment

Leave a Reply

Your email address will not be published. Required fields are marked *

ದೇಶ

IRCTC: ಆನ್‌ಲೈನ್‌ನಲ್ಲಿ ರೈಲ್ವೇ ಟಿಕೆಟ್‌ ಬುಕ್ಕಿಂಗ್‌ ಮಾಡೋ ಮುನ್ನ ಹೊಸ ನಿಯಮದ ಬಗ್ಗೆ ಇರಲಿ ಗಮನ!

IRCTC: ಹೊಸ ನಿಯಮದ ಪ್ರಕಾರ ಒಬ್ಬ ವ್ಯಕ್ತಿ ತನ್ನ ಖಾತೆಯಿಂದ ಪ್ರತಿ ತಿಂಗಳು 12ವರೆಗೆ ಟಿಕೆಟ್‌ ಬುಕ್ಕಿಂಗ್‌ ಮಾಡಬಹುದಾಗಿದೆ. ಖಾತೆದಾರರು ಆಧಾರ್-ದೃಢೀಕರಣವನ್ನು ಹೊಂದಿದ್ದರೆ, ಅವರು ತಿಂಗಳಿಗೆ 24 ಟಿಕೆಟ್‌ಗಳನ್ನು ಕಾಯ್ದಿರಿಸಬಹುದು. ವೈಯಕ್ತಿಕ ಬಳಕೆದಾರ ID ಗಳನ್ನು ಬಳಸಿ ಬುಕ್ ಮಾಡಲಾದ ಟಿಕೆಟ್‌ಗಳು ಕೇವಲ ವೈಯಕ್ತಿಕ ಬಳಕೆಗಾಗಿ ಕಟ್ಟು ನಿಟ್ಟುಗೊಳಿಸಲಾಗಿದೆ. ಈ ಟಿಕೆಟ್‌ಗಳ ಯಾವುದೇ ವಾಣಿಜ್ಯ ಮಾರಾಟವನ್ನು ರೈಲ್ವೆ ಕಾಯಿದೆ, 1989 ರ ಸೆಕ್ಷನ್ 143 ರ ಅಡಿಯಲ್ಲಿ ಅಪರಾಧವೆಂದು ಪರಿಗಣಿಸಲಾಗುತ್ತದೆ.

VISTARANEWS.COM


on

IRCTC
Koo

ಹೊಸದಿಲ್ಲಿ: ನಮ್ಮ ಸ್ನೇಹಿತರಿಗೆ, ಸಂಬಂಧಿಕರಿಗೆ ಆನ್‌ಲೈನ್‌ನಲ್ಲಿ ರೈಲ್ವೆ ಟಿಕೆಟ್‌ ಬುಕ್ಕಿಂಗ್‌(Online Ticket Booking) ಮಾಡುವ ಅವಕಾಶವನ್ನು ತೆಗೆದು ಹಾಕಲಾಗಿದೆ ಎಂಬ ಸುದ್ದಿಯನ್ನು ರೈಲ್ವೇ ಸಚಿವಾಲಯ(Railway Ministry) ತಿರಸ್ಕರಿಸಿದೆ. ರೈಲ್ವೇ ಸಚಿವಾಲಯದ ವಕ್ತಾರ ಈ ಬಗ್ಗೆ ಮಾಹಿತಿ ನೀಡಿದ್ದು, ಈ ಸುದ್ದಿ ಸುಳ್ಳು ಮತ್ತು ದಾರಿ ತಪ್ಪಿಸುವಂತ ವಿಚಾರ ಎಂದು ಸ್ಪಷ್ಟಪಡಿಸಿದೆ. ಬೇರೆ ಬೇರೆ ಸರ್‌ನೇಮ್‌ಗಳಿರುವವರೂ ಪರಸ್ಪರ ಟಿಕೆಟ್‌ ಬುಕ್ಕಿಂಗ್‌ ಮಾಡಿಕೊಳ್ಳಬಹುದು ಎಂದು ಹೇಳಿದೆ. ಇದರ ಜೊತೆಗೆ ರೈಲ್ವೇ ಇಲಾಖೆ(IRCTC) ವೆಬ್‌ಸೈಟ್‌ನಲ್ಲಿ ಇ ಟಿಕೆಟ್‌ ಬುಕ್ಕಿಂಗ್‌ ಮಾಡಲು ಕೆಲವೊಂದು ನಿಯಮಗಳನ್ನು ಜಾರಿಗೊಳಿಸಲಾಗಿದೆ. ಅದು ಸ್ನೇಹಿತರು, ಕುಟುಂಬಸ್ಥರ ಮತ್ತು ಸಂಬಂಧಿಕರಿಗೆ ವೈಯಕ್ತಿಕ ಯೂಸರ್‌ ಐಡಿ ಬಳಸಿ ಟಿಕೆಟ್‌ ಬುಕ್‌ ಮಾಡಬಹುದಾಗಿದೆ.

ಪ್ರತಿ ವ್ಯಕ್ತಿ ಎಷ್ಟು ಟಿಕೆಟ್‌ ಬುಕ್‌ ಮಾಡಬಹುದು?

ಹೊಸ ನಿಯಮದ ಪ್ರಕಾರ ಒಬ್ಬ ವ್ಯಕ್ತಿ ತನ್ನ ಖಾತೆಯಿಂದ ಪ್ರತಿ ತಿಂಗಳು 12ವರೆಗೆ ಟಿಕೆಟ್‌ ಬುಕ್ಕಿಂಗ್‌ ಮಾಡಬಹುದಾಗಿದೆ. ಖಾತೆದಾರರು ಆಧಾರ್-ದೃಢೀಕರಣವನ್ನು ಹೊಂದಿದ್ದರೆ, ಅವರು ತಿಂಗಳಿಗೆ 24 ಟಿಕೆಟ್‌ಗಳನ್ನು ಕಾಯ್ದಿರಿಸಬಹುದು. ವೈಯಕ್ತಿಕ ಬಳಕೆದಾರ ID ಗಳನ್ನು ಬಳಸಿ ಬುಕ್ ಮಾಡಲಾದ ಟಿಕೆಟ್‌ಗಳು ಕೇವಲ ವೈಯಕ್ತಿಕ ಬಳಕೆಗಾಗಿ ಕಟ್ಟು ನಿಟ್ಟುಗೊಳಿಸಲಾಗಿದೆ. ಈ ಟಿಕೆಟ್‌ಗಳ ಯಾವುದೇ ವಾಣಿಜ್ಯ ಮಾರಾಟವನ್ನು ರೈಲ್ವೆ ಕಾಯಿದೆ, 1989 ರ ಸೆಕ್ಷನ್ 143 ರ ಅಡಿಯಲ್ಲಿ ಅಪರಾಧವೆಂದು ಪರಿಗಣಿಸಲಾಗುತ್ತದೆ.

ಆನ್‌ಲೈನ್‌ ಟಿಕೆಟ್‌ ಬುಕ್ಕಿಂಗ್‌ ಮಾಡುವುದು ಹೇಗೆ?

  1. IRCTC ವೆಬ್‌ಸೈಟ್‌ಗೆ ಭೇಟಿ ನೀಡಿ ಮತ್ತು ನಿಮ್ಮ ಖಾತೆಗೆ ಲಾಗ್ ಇನ್ ಮಾಡಿ.
    “ಬುಕ್ ಯುವರ್ ಟಿಕೆಟ್” ಆಯ್ಕೆಯ ಮೇಲೆ ಕ್ಲಿಕ್ ಮಾಡಿ.
    ಬೋರ್ಡಿಂಗ್ ಮತ್ತು ಡೆಸ್ಟಿನೇಶನ್‌ ವಿಳಾಸಗಳನ್ನು ಭರ್ತಿ ಮಾಡಿ.
    ಪ್ರಯಾಣದ ದಿನಾಂಕವನ್ನು ಆಯ್ಕೆಮಾಡಿ.
    ಪ್ರಯಾಣದ ವರ್ಗವನ್ನು ಆಯ್ಕೆಮಾಡಿ.
    ಲಭ್ಯವಿರುವ ರೈಲು ಆಯ್ಕೆಗಳನ್ನು ವೀಕ್ಷಿಸಿ.
    “ಬುಕ್ ನೌ” ಆಯ್ಕೆಯ ಮೇಲೆ ಕ್ಲಿಕ್ ಮಾಡಿ.
    ಪ್ರಯಾಣಿಕರ ವಿವರಗಳನ್ನು ಭರ್ತಿ ಮಾಡಿ.
    ಮೊಬೈಲ್ ಸಂಖ್ಯೆ ಮತ್ತು ಕ್ಯಾಪ್ಚಾ ಕೋಡ್ ಅನ್ನು ನಮೂದಿಸಿ.

ಟಿಕೆಟ್‌ ಕ್ಯಾನ್ಸಲ್‌ ಮಾಡೋದು ಹೇಗೆ?

  1. IRCTC ವೆಬ್‌ಸೈಟ್‌ಗೆ ಹೋಗಿ ಮತ್ತು ನಿಮ್ಮ ಬಳಕೆದಾರಹೆಸರು ಮತ್ತು ಪಾಸ್‌ವರ್ಡ್ ಅನ್ನು ನಮೂದಿಸಿ.
    “ನನ್ನ ಖಾತೆ” ವಿಭಾಗದ ಮೇಲೆ ಸುಳಿದಾಡಿ ಮತ್ತು ಡ್ರಾಪ್-ಡೌನ್ ಮೆನುವಿನಿಂದ “ಬುಕ್ ಮಾಡಿದ ಟಿಕೆಟ್ ಇತಿಹಾಸ” ಆಯ್ಕೆಮಾಡಿ.
    ನೀವು ರದ್ದುಗೊಳಿಸಲು ಬಯಸುವ ಬುಕಿಂಗ್ ಅನ್ನು ಹುಡುಕಿ ಮತ್ತು “ಟಿಕೆಟ್ ರದ್ದುಗೊಳಿಸು” ಆಯ್ಕೆಯನ್ನು ಕ್ಲಿಕ್ ಮಾಡಿ.
    ಒಂದು ಪಾಪ್-ಅಪ್ ವಿಂಡೋ ಕಾಣಿಸುತ್ತದೆ.
    ನೀವು ರದ್ದುಗೊಳಿಸಲು ಬಯಸುವ ಪ್ರಯಾಣಿಕರನ್ನು ಆಯ್ಕೆ ಮಾಡಿ ಮತ್ತು ಮುಂದಿನ ಪೆಟ್ಟಿಗೆಯನ್ನು ಪರಿಶೀಲಿಸಿ

ಇದನ್ನೂ ಓದಿ: Manoj Kalyane: ಬಿಜೆಪಿ ಮುಖಂಡ, ಮಧ್ಯ ಪ್ರದೇಶ ಸಚಿವರ ಆಪ್ತನ ಹತ್ಯೆ; ಬೈಕ್‌ನಲ್ಲಿ ಬಂದು ಗುಂಡಿನ ಮಳೆಗೆರೆದ ದುಷ್ಕರ್ಮಿಗಳು

Continue Reading

ದೇಶ

Lok Sabha Speaker: ಎರಡನೇ ಬಾರಿಗೆ ಲೋಕಸಭೆ ಸ್ಪೀಕರ್‌ ಆಗಿ ಓಂ ಬಿರ್ಲಾ ಆಯ್ಕೆ

Lok Sabha Speaker: 18ನೇ ಲೋಕಸಭೆಯ ಸ್ಪೀಕರ್‌ ಯಾರಾಗುತ್ತಾರೆ ಎನ್ನುವ ಕುತೂಹಲಕ್ಕೆ ತೆರೆ ಬಿದ್ದಿದೆ. ಬಿಜೆಪಿ ಸಂಸದ ಓಂ ಬಿರ್ಲಾ ಅವರು ಸ್ಪೀಕರ್‌ ಆಗಿ ಎರಡನೇ ಬಾರಿಗೆ ಆಯ್ಕೆಯಾಗಿದ್ದಾರೆ. ಇಂಡಿ ಬಣದಿಂದ ಕಾಂಗ್ರೆಸ್‌ ಸಂಸದ ಕೊಂಡಿಕುನಾಲ್ ಸುರೇಶ್ ಭಾರೀ ಕುತೂಹಲ ಮೂಡಿಸಿದ್ದ ಚುನಾವಣೆಯಲ್ಲಿ ಓಂ ಬಿರ್ಲಾ ಗೆಲುವಿನ ನಗೆ ಬೀರಿದ್ದಾರೆ.

VISTARANEWS.COM


on

Lok Sabha Speaker
Koo

ನವದೆಹಲಿ: 18ನೇ ಲೋಕಸಭೆಯ ಸ್ಪೀಕರ್‌ ಯಾರಾಗುತ್ತಾರೆ ಎನ್ನುವ ಕುತೂಹಲಕ್ಕೆ ತೆರೆ ಬಿದ್ದಿದೆ. ಎನ್‌ಡಿಎಯಿಂದ ಕಣಕ್ಕಿಳಿದ ಬಿಜೆಪಿ ಸಂಸದ ಓಂ ಬಿರ್ಲಾ (Om Birla) ಅವರು ಸ್ಪೀಕರ್‌ ಆಗಿ ಎರಡನೇ ಬಾರಿಗೆ ಆಯ್ಕೆಯಾಗಿದ್ದಾರೆ (Lok Sabha Speaker). ಸಾಮಾನ್ಯವಾಗಿ ಅವಿರೋಧವಾಗಿ ಸ್ಪೀಕರ್‌ ಹುದ್ದೆಗೆ ಅಭ್ಯರ್ಥಿಗಳನ್ನು ಆಯ್ಕೆ ಮಾಡಲಾಗುತ್ತದೆ. ಆದರೆ ಈ ಬಾರಿ ಆಡಳಿತ ರೂಢ ಎನ್‌ಡಿಎ ಮತ್ತು ಪ್ರತಿಪಕ್ಷಗಳ ಇಂಡಿ ಬಣದ ನಡುವೆ ಒಮ್ಮತ ಮೂಡದ ಹಿನ್ನೆಲೆಯಲ್ಲಿ ಹಲವು ದಶಕಗಳ ಬಳಿಕ ಚುನಾವಣೆ ನಡೆಸಲಾಯಿತು. ಇಂಡಿ ಬಣದಿಂದ ಕಾಂಗ್ರೆಸ್‌ ಸಂಸದ ಕೊಂಡಿಕುನಾಲ್ ಸುರೇಶ್ (Kondikunal Suresh) ಕಣಕ್ಕಿಳಿದಿದ್ದರು. ಭಾರೀ ಕುತೂಹಲ ಮೂಡಿಸಿದ್ದ ಈ ಐತಿಹಾಸಿಕ ಚುನಾವಣೆಯಲ್ಲಿ ಇದೀಗ ಓಂ ಬಿರ್ಲಾ ಗೆಲುವಿನ ನಗೆ ಬೀರಿದ್ದಾರೆ.

ಬೆಳಿಗ್ಗೆ 11 ಗಂಟೆಗೆ ಸುಮಾರಿಗೆ ಆರಂಭವಾದ ಚುನಾವಣಾ ಪ್ರಕ್ರಿಯೆಯಲ್ಲಿ ಓಂ ಬಿರ್ಲಾ ಅವರು ಬಹುಮತಗಳನ್ನು ಪಡೆದುಕೊಂಡರು. ಓಂ ಬಿರ್ಲಾ ಅವರನ್ನು ಸ್ಪೀಕರ್‌ ಆಗಿ ಆಯ್ಕೆ ಮಾಡುವ ಪ್ರಸ್ತಾಪವನ್ನು ಪ್ರಧಾನಿ ನರೇಂದ್ರ ಮೋದಿ ಮಂಡಿಸಿದರು. ಬಳಿಕ ಹಲವು ನಾಯಕರು ಅನುಮೋದಿಸಿದರು. ಧ್ವನಿ ಮತದ ಮೂಲಕ ಸದಸ್ಯರು ಮತ ಚಲಾಯಿಸಿದರು. ಈ ಮೂಲಕ ಓಂ ಬಿರ್ಲಾ ಅವರು ಬಲರಾಮ್ ಜಖರ್ (1980-89) ನಂತರ ಎರಡು ಪೂರ್ಣ ಅವಧಿಗೆ ಆಯ್ಕೆಯಾದ ಎರಡನೇ ಸ್ಪೀಕರ್ ಎನ್ನುವ ಹೆಗ್ಗಳಿಕೆಗೆ ಪಾತ್ರರಾದರು. ಲೋಕಸಭೆಯ ಎರಡನೇ ಸ್ಪೀಕರ್ ಎಂ.ಎ.ಅಯ್ಯಂಗಾರ್ ಮತ್ತು ಗುರ್ದಿಯಾಲ್ ಸಿಂಗ್ ಧಿಲ್ಲಾನ್ ಈ ಹಿಂದೆ ಎರಡು ಬಾರಿ ಈ ಹುದ್ದೆಯನ್ನು ಆಯ್ಕೆಯಾಗಿದ್ದರೂ ಅವರ ಎರಡನೇ ಅವಧಿ ಒಂದೂವರೆ ವರ್ಷಕ್ಕಿಂತ ಹೆಚ್ಚು ಕಾಲ ಉಳಿದಿರಲಿಲ್ಲ. ಹಂಗಾಮಿ ಸ್ಪೀಕರ್‌ ಭಾರ್ತೃಹರಿ ಮಹತಾಬ್‌ ಚುನಾವಣಾ ಪ್ರಕ್ರಿಯೆ ನಡೆಸಿಕೊಟ್ಟರು.

ವಿಪ್‌ ಜಾರಿ

ಆರಂಭದಲ್ಲಿ ಎನ್‌ಡಿಎ ಪ್ರತಿಪಕ್ಷಗಳ ಮನವೊಲಿಸಲು ಯತ್ನಿಸಿತ್ತು. ಓಂ ಬಿರ್ಲಾ ಅವರನ್ನು ಬೆಂಬಲಿಸಲು ಒಪ್ಪಿಗೆ ಸೂಚಿಸಿದ್ದ ಇಂಡಿ ಬಣ ಡೆಪ್ಯುಟಿ ಸ್ಪೀಕರ್ ತಮಗೆ ಸಿಗಬೇಕೆಂಬ ಷರತ್ತು ವಿಧಿಸಿತ್ತು. ಆದರೆ ಇದಕ್ಕೆ ಎನ್‌ಡಿಎ ಒಪ್ಪಿಗೆ ಸೂಚಿಸದ ಹಿನ್ನೆಲೆಯಲ್ಲಿ ಮಾತುಕತೆ ಮುರಿದು ಬಿದ್ದು ಕೊನೆಯ ಕ್ಷಣದಲ್ಲಿ ಕೊಂಡಿಕುನಾಲ್ ಸುರೇಶ್ ಮಂಗಳವಾರ ನಾಮಪತ್ರ ಸಲ್ಲಿಸಿದ್ದರು. ಬಿಜೆಪಿ ಮತ್ತು ಕಾಂಗ್ರೆಸ್‌ ಎಲ್ಲ ಸದಸ್ಯರಿಗೆ ಹಾಜರಾಗುವಂತೆ ಮಂಗಳವಾರ ವಿಪ್‌ ಜಾರಿ ಮಾಡಿದ್ದವು.

ಕೊನೆ ಕ್ಷಣದಲ್ಲಿ ಸುರೇಶ್‌ಗೆ ಬೆಂಬಲ ಸೂಚಿಸಿದ ಟಿಎಂಸಿ

ಇಂಡಿ ಬಣ ಅಭ್ಯರ್ಥಿಯಾಗಿ ಕೆ.ಸುರೇಶ್ ಅವರನ್ನು ಆಯ್ಕೆ ಮಾಡುವ ಮುನ್ನ ತಮ್ಮ ಬಳಿ ಸಮಾಲೋಚನೆಯನ್ನೇ ನಡೆಸಿಲ್ಲ ಎಂದು ಟಿಎಂಸಿ ಮಂಗಳವಾರ ಆರೋಪಿಸಿತ್ತು. ಕೆ. ಸುರೇಶ್ ಅವರನ್ನು ಇಂಡಿ ಬಣ ಜಂಟಿ ನಾಮನಿರ್ದೇಶಿತ ಅಭ್ಯರ್ಥಿಯಾಗಿ ಕಣಕ್ಕಿಳಿಸುವ ಪ್ರತಿಪಕ್ಷಗಳ ನಿರ್ಧಾರದ ಬಗ್ಗೆ ನಮ್ಮ ಪಕ್ಷದ ನಾಯಕರ ಬಳಿ ಸಮಾಲೋಚನೆ ನಡೆಸಿಲ್ಲ. ದುರದೃಷ್ಟವಶಾತ್ ಇದು ಏಕಪಕ್ಷೀಯ ನಿರ್ಧಾರ ಎಂದು ಟಿಎಂಸಿ ಹೇಳಿ ಇಂಡಿ ಬಣವನ್ನು ಆತಂಕಕ್ಕೆ ದೂಡಿತ್ತು. ಆದರೆ ಕೊನೆಕ್ಷಣದಲ್ಲಿ ಟಿಎಂಸಿ ಸದಸ್ಯರು ಸುರೇಶ್‌ ಅವರಿಗೆ ಬೆಂಬಲ ಸೂಚಿಸಿದರು.

ಇದನ್ನೂ ಓದಿ: Lok Sabha Speaker Election: ಲೋಕಸಭೆ ಇತಿಹಾಸದಲ್ಲೇ ಮೊದಲ ಬಾರಿ ಸ್ಪೀಕರ್‌ ಹುದ್ದೆಗೆ ನಡೆಯಲಿದೆ ಚುನಾವಣೆ

ಏಳು ಸಂಸದರು ಇನ್ನೂ ಪ್ರಮಾಣ ವಚನ ಸ್ವೀಕರಿಸಿಲ್ಲ ಮತ್ತು ಕೇರಳದ ವಯನಾಡು ಸ್ಥಾನಕ್ಕೆ ರಾಹುಲ್‌ ಗಾಂಧಿ ರಾಜೀನಾಮೆ ನೀಡಿದ ಕಾರಣ 535 ಸಂಸದರು ಇಂದು ಮತ ಚಲಾಯಿಸಿದ್ದರು. ಹೀಗಾಗಿ ಬಹುಮತಕ್ಕೆ 268 ಸದಸ್ಯರ ಬೆಂಬಲ ಅಗತ್ಯವಿತ್ತು. ಓಂ ಬಿರ್ಲಾ ಅವರಿಗೆ ಎನ್‌ಡಿಎ ಜತೆಗೆ ವೈಎಸ್ಆರ್ ಕಾಂಗ್ರೆಸ್ ಪಕ್ಷ, ಇತರರು ಬೆಂಬಲ ಸೂಚಿಸಿದ್ದರಿಂದ ಸುಲಭವಾಗಿ 300ಕ್ಕೆಂತ ಹೆಚ್ಚು ಮತ ಪಡೆದುಕೊಂಡರು.

Continue Reading

ದೇಶ

VHP leader murder: VHP ಮುಖಂಡನ ಬರ್ಬರ ಹತ್ಯೆ; ಹಂತಕರ ಪತ್ತೆಗಾಗಿ NIA 10ಲಕ್ಷ ರೂ. ಬಹುಮಾನ ಘೋಷಣೆ

VHP leader murder: ಎನ್‌ಐಎ ಪ್ರಕಟಣೆ ಪ್ರಕಾರ ಹಂತಕರಾದ ಗರ್‌ಪಧನಾ ಗ್ರಾಮದ ನಿವಾಸಿಯಾಗಿರುವ ಕುಲದೀಪ್‌ ಸಿಂಗ್‌ ಪುತ್ರ ಹರ್ಜಿತ್‌ ಸಿಂಗ್‌ ಅಲಿಯಾಸ್‌ ಲಡ್ಡಿ ಮತ್ತು ಯಮುನಾ ನಗರ ನಿವಾಸಿ ಕುಲ್ಬೀರ್‌ ಸಿಂಗ್‌ ಪುತ್ರ ಸುಖ್ವಿಂದರ್‌ ಸಿಂಗ್‌ ವಿರುದ್ಧ ಹರಿಯಾಣದ ಜಗಧಾರಿ ಪೊಲೀಸ್‌ ಠಾಣೆಯಲ್ಲಿ ಮೇ 9ರಂದು ವಿಕಾಸ್‌ ಪ್ರಭಾಕರ್‌ ಹತ್ಯೆ ಪ್ರಕರಣ ದಾಖಲಾಗಿದೆ.

VISTARANEWS.COM


on

VHP leader murder
Koo

ಪಂಜಾಬ್‌: ವಿಶ್ವ ಹಿಂದೂ ಪರಿಷದ್‌(VHP leader murder) ಮುಖಂಡನ ಹಂತಕರ ಪತ್ತೆಗಾಗಿ ರಾಷ್ಟ್ರೀಯ ತನಿಖಾ ಸಂಸ್ಥೆ(NIA) ತಲಾ ಹತ್ತು ಲಕ್ಷ ರೂ. ಬಹುಮಾನ ಘೋಷಿಸಿದೆ. ಅಷ್ಟೇ ಅಲ್ಲದೇ ಎನ್‌ಐಎ ಈ ಇಬ್ಬರು ಹಂತಕರ ಫೊಟೋವನ್ನೂ ಸಹ ಬಿಡುಗಡೆ ಮಾಡಿದೆ. ಕಳೆದ ತಿಂಗಳು ವಿಶ್ವ ಹಿಂದೂ ಪರಿಷದ್‌ ನಾಯಕ ವಿಕಾಸ್‌ ಪ್ರಭಾಕರ್‌ನನ್ನು ಬರ್ಬರವಾಗಿ ಹತ್ಯೆ ಮಾಡಲಾಗಿತ್ತು. ಇದೀಗ ಹಂತಕರ ಪತ್ತೆಗಾಗಿ ಎನ್‌ಐಎ ಪ್ರಕಟಣೆ ಹೊರಡಿಸಿದೆ.

ಎನ್‌ಐಎ ಪ್ರಕಟಣೆ ಪ್ರಕಾರ ಹಂತಕರಾದ ಗರ್‌ಪಧನಾ ಗ್ರಾಮದ ನಿವಾಸಿಯಾಗಿರುವ ಕುಲದೀಪ್‌ ಸಿಂಗ್‌ ಪುತ್ರ ಹರ್ಜಿತ್‌ ಸಿಂಗ್‌ ಅಲಿಯಾಸ್‌ ಲಡ್ಡಿ ಮತ್ತು ಯಮುನಾ ನಗರ ನಿವಾಸಿ ಕುಲ್ಬೀರ್‌ ಸಿಂಗ್‌ ಪುತ್ರ ಸುಖ್ವಿಂದರ್‌ ಸಿಂಗ್‌ ವಿರುದ್ಧ ಹರಿಯಾಣದ ಜಗಧಾರಿ ಪೊಲೀಸ್‌ ಠಾಣೆಯಲ್ಲಿ ಮೇ 9ರಂದು ವಿಕಾಸ್‌ ಪ್ರಭಾಕರ್‌ ಹತ್ಯೆ ಪ್ರಕರಣ ದಾಖಲಾಗಿದೆ.

ಏನಿದು ಪ್ರಕರಣ?

ಪ್ರಭಾಕರ್ ಅವರು ವಿಎಚ್‌ಪಿಯ ನಂಗಲ್ ಘಟಕದ ಅಧ್ಯಕ್ಷರಾಗಿ ಸೇವೆ ಸಲ್ಲಿಸಿದ್ದರು. ದುರಂತವೆಂದರೆ, ಏಪ್ರಿಲ್ 13, 2024 ರಂದು ಪಂಜಾಬ್‌ನ ರೂಪನಗರ ಜಿಲ್ಲೆಯ ನಂಗಲ್ ಪಟ್ಟಣದ ಅವರ ಅಂಗಡಿಯಲ್ಲಿ ಮೋಟಾರ್‌ಸೈಕಲ್‌ನಲ್ಲಿ ಹೋಗುತ್ತಿದ್ದ ಇಬ್ಬರು ಅಪರಿಚಿತ ದುಷ್ಕರ್ಮಿಗಳು ಮಾರಣಾಂತಿಕವಾಗಿ ಗುಂಡು ಹಾರಿಸಿ ಕೊಂದಿದ್ದರು. ಇಬ್ಬರು ದುಷ್ಕರ್ಮಿಗಳು ರೂಪನಗರ ರೈಲು ನಿಲ್ದಾಣದ ಬಳಿ ಇರುವ ಬಗ್ಗಾ ಅವರ ಮಿಠಾಯಿ ಅಂಗಡಿಗೆ ನುಗ್ಗಿ ಅವರ ಮೇಲೆ ಗುಂಡು ಹಾರಿಸಿದರು. ತದನಂತರ ಸ್ಥಳದಿಂದ ಪರಾರಿಯಾಗಿದ್ದರು.

ಪ್ರಭಾಕರ್ ಹತ್ಯೆಯ ಹಿಂದಿನ ದೊಡ್ಡ ಪಿತೂರಿಯನ್ನು ಬಯಲಿಗೆಳೆಯಲು ಕೇಂದ್ರ ಗೃಹ ಸಚಿವಾಲಯವು ಪ್ರಕರಣದ ಕುರಿತು ಎನ್‌ಐಎ ತನಿಖೆಗೆ ಶಿಫಾರಸು ಮಾಡಿತ್ತು. ಆರೋಪಿಗಳ ವಿರುದ್ಧ ಐಪಿಸಿ, ಯುಎ(ಪಿ) ಕಾಯ್ದೆ ಮತ್ತು ಶಸ್ತ್ರಾಸ್ತ್ರ ಕಾಯ್ದೆಯ ವಿವಿಧ ಸೆಕ್ಷನ್‌ಗಳ ಅಡಿಯಲ್ಲಿ ಪ್ರಕರಣ ದಾಖಲಿಸಲಾಗಿದೆ.

ಆರೋಪಿಗಳ ಬಗ್ಗೆ ಯಾವುದೇ ಮಾಹಿತಿಯನ್ನು ಸಿಕ್ಕಿದರೆ ಎನ್‌ಐಎ ಪ್ರಧಾನ ಕಚೇರಿಯ ದೂರವಾಣಿ ಸಂಖ್ಯೆ: 011-24368800, WhatsApp/ಟೆಲಿಗ್ರಾಂ: +91-8585931100 ಮತ್ತು ಇಮೇಲ್ ಐಡಿ: do.nia@gov.in ನಲ್ಲಿ ಹಂಚಿಕೊಳ್ಳಬಹುದು ಎಂದು NIA ತಿಳಿಸಿದೆ. ಇದಲ್ಲದೆ, ದೂರವಾಣಿ ಸಂಖ್ಯೆ: 0172-2682900, 2682901 ಮೂಲಕ ಇಬ್ಬರ ವಿರುದ್ಧ ಮಾಹಿತಿಯನ್ನು ಹಂಚಿಕೊಳ್ಳಲು ಅದರ ಚಂಡೀಗಢ ಕಚೇರಿಯನ್ನು ಸಂಪರ್ಕಿಸಬಹುದು; WhatsApp/ಟೆಲಿಗ್ರಾಮ್ ಸಂಖ್ಯೆ: 7743002947ಮತ್ತು info-chd.nia@gov.in ಕ್ಕೂ ಸಂಪರ್ಕಿಸಬಹುದು ಎಂದು ಎನ್‌ಐಎ ಹೇಳಿದೆ.

ಇದನ್ನೂ ಓದಿ: Bengaluru Power Cut: ಜೂ.27ರಂದು ಬೆಂಗಳೂರಿನ ಈ ಪ್ರದೇಶಗಳಲ್ಲಿ ವಿದ್ಯುತ್‌ ವ್ಯತ್ಯಯ

Continue Reading

ದೇಶ

Lok Sabha Speaker Election: ಲೋಕಸಭೆ ಸ್ಪೀಕರ್ ಚುನಾವಣೆ ಇಂದು; ಆಡಳಿತ ಪಕ್ಷ-ಪ್ರತಿಪಕ್ಷ ಬಲಾಬಲ ಹೀಗಿದೆ

Lok Sabha Speaker Election: ಇಂದು ಲೋಕಸಭಾ ಸ್ಪೀಕರ್‌ ಆಯ್ಕೆಗೆ ಚುನಾವಣೆ ನಡೆಯಲಿದೆ. ಎನ್‌ಡಿಎಯ ಬಿಜೆಪಿ ಸಂಸದ ಓಂ ಬಿರ್ಲಾ ಮತ್ತು ಪ್ರತಿಪಕ್ಷಗಳ ಇಂಡಿ ಒಕ್ಕೂಟದಿಂದ ಕಾಂಗ್ರೆಸ್ ಸಂಸದ ಕೊಂಡಿಕುನಾಲ್ ಸುರೇಶ್ ಮಧ್ಯೆ ತೀವ್ರ ಪೈಪೋಟಿ ಕಂಡು ಬಂದಿದೆ. ಈಗಾಗಲೇ ಬಿಜೆಪಿ ಮತ್ತು ಕಾಂಗ್ರೆಸ್‌ ತನ್ನ ಸಂಸದರಿಗೆ ವಿಪ್‌ ಜಾರಿ ಮಾಡಿ ಹಾಜರಿರುವಂತೆ ಸೂಚಿಸಿದೆ.

VISTARANEWS.COM


on

Lok Sabha Speaker Election
Koo

ನವದೆಹಲಿ: ನರೇಂದ್ರ ಮೋದಿ (Narendra Modi) ನೇತೃತ್ವದ ಎನ್‌ಡಿಎ 3.0 ಸರ್ಕಾರ ಅಸ್ತಿತ್ವಕ್ಕೆ ಬಂದ ಬಳಿಕದ ಮೊದಲ ಅಧಿವೇಶನ (Parliament Session 2024) ಆರಂಭವಾಗಲಿದೆ. ಈಗಾಗಲೇ ಸಂಸದರು ಪ್ರಮಾಣ ವಚನ ಸ್ವೀಕರಿಸಿದ್ದು, ಇಂದು ಲೋಕಸಭಾ ಸ್ಪೀಕರ್‌ ಆಯ್ಕೆಗೆ ಚುನಾವಣೆ ನಡೆಯಲಿದೆ (Lok Sabha Speaker Election). ಎನ್‌ಡಿಎಯಿಂದ ಬಿಜೆಪಿ ಸಂಸದ ಓಂ ಬಿರ್ಲಾ (Om Birla) ಮತ್ತು ಪ್ರತಿಪಕ್ಷಗಳ ಇಂಡಿ ಒಕ್ಕೂಟದಿಂದ ಕಾಂಗ್ರೆಸ್ ಸಂಸದ ಕೊಂಡಿಕುನಾಲ್ ಸುರೇಶ್ (Kondikunal Suresh) ಮಂಗಳವಾರ ಲೋಕಸಭಾ ಸ್ಪೀಕರ್ ಹುದ್ದೆಗೆ ನಾಮಪತ್ರ ಸಲ್ಲಿಸಿದ್ದಾರೆ.

ಬಲಾಬಲ ಹೀಗಿದೆ

ಲೋಕಸಭೆಯಲ್ಲಿ ಬಿಜೆಪಿ ಈಗಾಗಲೇ ತನ್ನದೇ ಸಂಸದರಿಂದ 240 ಮತಗಳನ್ನು ಮತ್ತು ಎನ್‌ಡಿಎ ಪಾಲುದಾರ ಪಕ್ಷಗಳಿಂದ 63 ಮತಗಳನ್ನು ಹೊಂದಿದೆ. ಇದರಲ್ಲಿ ಚಂದ್ರಬಾಬು ನಾಯ್ಡು ಅವರ ಟಿಡಿಪಿಯ 16 ಸಂಸದರು ಮತ್ತು ಪವನ್ ಕಲ್ಯಾಣ್‌ ಅವರ ಜನಸೇನಾ ಪಕ್ಷದ 2 ಸಂಸದರು ಸೇರಿಕೊಂಡಿದ್ದಾರೆ. ಒಟ್ಟು 293 ಸಂಖ್ಯಾಬಲವಿದೆ. ಹೆಚ್ಚುವರಿಯಾಗಿ ಆಂಧ್ರಪ್ರದೇಶದ ಮಾಜಿ ಮುಖ್ಯಮಂತ್ರಿ ಜಗನ್ ಮೋಹನ್ ರೆಡ್ಡಿ ಅವರ ವೈಎಸ್‌ಆರ್ ಕಾಂಗ್ರೆಸ್ ಪಕ್ಷವು ಬಿಜೆಪಿ ಅಭ್ಯರ್ಥಿ ಓಂ ಬಿರ್ಲಾ ಅವರನ್ನು ಬೆಂಬಲಿಸಲಿದೆ ಎನ್ನಲಾಗಿದ್ದು, ಅವರ 4 ಸಂಸದರ ಬಲ ಸೇರಿಸಿದರೆ ಎನ್‌ಡಿಎಗೆ ಒಟ್ಟು 297 ಮತ ದೊರೆಯಲಿದೆ. ಸ್ಥಳೀಯವಾಗಿ ವಿರೋಧ ಇರುವ ಹೊರತಾಗಿಯೂ ಬಿರ್ಲಾ ಅವರನ್ನು ಬೆಂಬಲಿಸಲು ವೈಎಸ್​ಆರ್​ ನಿರ್ಧರಿಸಿದೆ.

ಇನ್ನು ಪ್ರತಿಪಕ್ಷಗಳ ಇಂಡಿ ಬಣ ಲೋಕಸಭೆಯಲ್ಲಿ 232 ಸಂಸದರನ್ನು ಹೊಂದಿದೆ. ಈ ಪೈಕಿ 7 ಸಂಸದರು ಇನ್ನೂ ಪ್ರಮಾಣ ವಚನ ಸ್ವೀಕರಿಸಿಲ್ಲ. ಹೀಗಾಗಿ ಅವರಿಗೆ ವೋಟಿಂಗ್‌ ಮಾಡುವ ಅಧಿಕಾರವಿಲ್ಲ. ಇದರಲ್ಲಿ ಕಾಂಗ್ರೆಸ್‌ ಐವರು ಮತ್ತು ತೃಣಮೂಲ ಕಾಂಗ್ರೆಸ್‌ ಇಬ್ಬರು ಸೇರಿದ್ದಾರೆ. ಜತೆಗೆ ಕೆಲವು ಸ್ವತಂತ್ರ ಅಭ್ಯರ್ಥಿಗಳೂ ಪ್ರಮಾಣ ವಚನ ಸ್ವೀಕರಿಸಿಲ್ಲ. ಈ ಕೆಲವು ನಾಯಕರ ಪ್ರಮಾಣ ವಚನ ಸ್ವೀಕಾರ ಏಕೆ ಬಾಕಿ ಉಳಿದಿದೆ ಎಂಬುದು ಇನ್ನೂ ತಿಳಿದುಬಂದಿಲ್ಲ. ಅರ್ಹತೆ ಹೊಂದಿರುವ ಸಂಸದರ ಸಂಖ್ಯೆಯನ್ನು ಆಧರಿಸಿ ವೋಟಿಂಗ್‌ ನಡೆಯಲಿದೆ. ಹೀಗಾಗಿ ಬಹುಮತಕ್ಕೆ 269 ಮತಗಳ ಅಗತ್ಯವಿದೆ.

ಶಾಕ್‌ ಕೊಟ್ಟ ಟಿಎಂಸಿ

ಈ ನಡುವೆ ಇಂಡಿ ಬಣ ಅಭ್ಯರ್ಥಿಯಾಗಿ ಕೆ.ಸುರೇಶ್ ಅವರನ್ನು ಆಯ್ಕೆ ಮಾಡುವ ಮುನ್ನ ತಮ್ಮ ಬಳಿ ಸಮಾಲೋಚನೆಯನ್ನೇ ನಡೆಸಿಲ್ಲ ಎಂದು ಟಿಎಂಸಿ ಆರೋಪಿಸಿದೆ. ಕೆ. ಸುರೇಶ್ ಅವರನ್ನು ಇಂಡಿ ಬಣ ಜಂಟಿ ನಾಮನಿರ್ದೇಶಿತ ಅಭ್ಯರ್ಥಿಯಾಗಿ ಕಣಕ್ಕಿಳಿಸುವ ಪ್ರತಿಪಕ್ಷಗಳ ನಿರ್ಧಾರದ ಬಗ್ಗೆ ನಮ್ಮ ಪಕ್ಷದ ನಾಯಕರ ಬಳಿ ಸಮಾಲೋಚನೆ ನಡೆಸಿಲ್ಲ. ದುರದೃಷ್ಟವಶಾತ್ ಇದು ಏಕಪಕ್ಷೀಯ ನಿರ್ಧಾರ ಎಂದು ಟಿಎಂಸಿ ಹೇಳಿದೆ. ಹೀಗಾಗಿ ಟಿಎಂಸಿ ನಡೆ ಕುತೂಹಲ ಮೂಡಿಸಿದೆ.

ಇಂದು ಬೆಳಿಗ್ಗೆ 11 ಗಂಟೆಗೆ ಚುನಾವಣೆ ಪ್ರಕ್ರಿಯೆ ನಡೆಯಲಿದ್ದು, ಈಗಾಗಲೇ ಬಿಜೆಪಿ ಮತ್ತು ಕಾಂಗ್ರೆಸ್‌ ತನ್ನ ಸಂಸದರಿಗೆ ವಿಪ್‌ ಜಾರಿ ಮಾಡಿ ಹಾಜರಿರುವಂತೆ ಸೂಚಿಸಿದೆ.

ಇದನ್ನೂ ಓದಿ: Parliament Session 2024: ಸಂಸದರಾಗಿ ಪ್ರಮಾಣ ವಚನ ಸ್ವೀಕರಿಸಿದ ನರೇಂದ್ರ ಮೋದಿ

Continue Reading
Advertisement
Life threat
ಕರ್ನಾಟಕ5 mins ago

Life threat: ಹುಬ್ಬಳ್ಳಿ ಏರ್‌ಪೋರ್ಟ್‌ ನಿರ್ದೇಶಕರಿಗೆ ಜೀವ ಬೆದರಿಕೆ; ʼಲಾಂಗ್ ಲಿವ್ ಪ್ಯಾಲೆಸ್ತೀನ್ʼ ಮೇಲ್‌ ಐಡಿಯಿಂದ ಸಂದೇಶ

Para Badminton Ranking
ಕ್ರೀಡೆ16 mins ago

Para Badminton Ranking: ಮೊದಲ ಬಾರಿಗೆ ವಿಶ್ವ ನಂ.1 ಸ್ಥಾನಕ್ಕೇರಿದ ಕನ್ನಡಿಗ ಸುಹಾಸ್‌ ಯತಿರಾಜ್

Actor Darshan Renukaswamy assault police lathi found How did D Gang get
ಕ್ರೈಂ23 mins ago

Actor Darshan: ರೇಣುಕಾಸ್ವಾಮಿ ಹಲ್ಲೆಗೆ ಬಳಸಿದ್ದ ʻಪೊಲೀಸ್ ಲಾಠಿʼ ಪತ್ತೆ! ʻಡಿ ಗ್ಯಾಂಗ್‌ʼಗೆ ಸಿಕ್ಕಿದ್ದು ಹೇಗೆ?

IRCTC
ದೇಶ45 mins ago

IRCTC: ಆನ್‌ಲೈನ್‌ನಲ್ಲಿ ರೈಲ್ವೇ ಟಿಕೆಟ್‌ ಬುಕ್ಕಿಂಗ್‌ ಮಾಡೋ ಮುನ್ನ ಹೊಸ ನಿಯಮದ ಬಗ್ಗೆ ಇರಲಿ ಗಮನ!

1983 World Cup
ಕ್ರೀಡೆ49 mins ago

1983 WC Win Anniversary: ಚೊಚ್ಚಲ ಏಕದಿನ ವಿಶ್ವಕಪ್ ಗೆಲುವಿನ​ ಸವಿ ನೆನಪನ್ನು ವಿಂಡೀಸ್​ನಲ್ಲಿ ಕೇಕ್​ ಕತ್ತರಿಸಿ ಸಂಭ್ರಮಿಸಿದ ರವಿಶಾಸ್ತ್ರಿ, ಗವಾಸ್ಕರ್, ​ಬಿನ್ನಿ

Viral Video
Latest50 mins ago

Viral Video: ಪೇಪರ್ ನೋಡದೆ ಪ್ರಮಾಣ ವಚನ ಸ್ವೀಕರಿಸಿ ಬೆರಗುಗೊಳಿಸಿದ ಅತ್ಯಂತ ಕಿರಿಯ ಸಂಸದೆ!

cm siddaramaiah water price hike
ಕರ್ನಾಟಕ55 mins ago

CM Siddaramaiah: ತೈಲ, ಹಾಲು ಆಯ್ತು; ಮುಂದಿನ ಸರದಿಯಲ್ಲಿ ನೀರು, ಆಟೋ, ಬಸ್‌ ಟಿಕೆಟ್‌ ದರ ಏರಿಕೆ ಗ್ಯಾರಂಟಿ

Neha Gowda in saree with baby bump
ಸ್ಯಾಂಡಲ್ ವುಡ್56 mins ago

Neha Gowda: ಸೀರೆಯುಟ್ಟು ಸಿಂಪಲ್‌ ಆಗಿ ಗಂಡನ ಜತೆ ಪೋಸ್‌ ಕೊಟ್ಟ ಗರ್ಭಿಣಿ ನೇಹಾ ಗೌಡ!

Viral Video
Latest57 mins ago

Viral Video : ‘ಅಲ್ಲಾಹು ಅಕ್ಬರ್’ ಎನ್ನದ ಹಿಂದೂ ಬಾಲಕನಿಗೆ ಎಂಜಲು ನೆಕ್ಕಲು ಹೇಳಿದ ಮುಸ್ಲಿಂ ಯುವಕರು

Lok Sabha Speaker
ದೇಶ59 mins ago

Lok Sabha Speaker: ಎರಡನೇ ಬಾರಿಗೆ ಲೋಕಸಭೆ ಸ್ಪೀಕರ್‌ ಆಗಿ ಓಂ ಬಿರ್ಲಾ ಆಯ್ಕೆ

Sharmitha Gowda in bikini
ಕಿರುತೆರೆ9 months ago

Geetha Serial Kannada: ನಿದ್ದೆ ಕದ್ದ ಚೋರಿ! ನಟಿ `ಭಾನುಮತಿ’ ಹಾಟ್‌ ಪೋಟೊಗಳಿಗೆ ಫ್ಯಾನ್ಸ್ ಫುಲ್ ಫಿದಾ

Kannada Serials
ಕಿರುತೆರೆ9 months ago

Kannada Serials TRP: 2ನೇ ಸ್ಥಾನದಲ್ಲಿ 2 ಧಾರಾವಾಹಿಗಳು; ಟಿಆರ್‌ಪಿ ರೇಸ್‌ನಲ್ಲಿಲ್ಲ ಭಾಗ್ಯಲಕ್ಷ್ಮೀ!

Bigg Boss- Saregamapa 20 average TRP
ಕಿರುತೆರೆ8 months ago

Kannada Serials TRP: ಏಳನೇ ಸ್ಥಾನಕ್ಕೆ ʻಅಮೃತಧಾರೆʼ ಕುಸಿತ; ಬಿಗ್‌ ಬಾಸ್‌-ಸರಿಗಮಪ ಟಿಆರ್‌ಪಿ ಎಷ್ಟು?

galipata neetu
ಕಿರುತೆರೆ7 months ago

Kanyadana Serial: ಕಿರುತೆರೆಗೆ ಮತ್ತೆ ಎಂಟ್ರಿ ಕೊಟ್ಟ ʻಗಾಳಿಪಟʼ ಖ್ಯಾತಿಯ ʻನೀತುʼ!

Kannada Serials
ಕಿರುತೆರೆ9 months ago

Kannada Serials TRP: ನಾಲ್ಕನೇ ಸ್ಥಾನಕ್ಕೆ ಕುಸಿತ ಕಂಡ ʻಸೀತಾ ರಾಮʼ; ಟಿಆರ್‌ಪಿ ರೇಸ್‌ಗೆ ʻಭಾಗ್ಯಲಕ್ಷ್ಮಿʼ ಬ್ಯಾಕ್‌!

Kannada Serials
ಕಿರುತೆರೆ9 months ago

Kannada Serials TRP: ಟಿಆರ್‌ಪಿಯಲ್ಲಿ ʻಭಾಗ್ಯಲಕ್ಷ್ಮೀʼ ಹವಾ; ʻಪುಟ್ಟಕ್ಕನ ಮಕ್ಕಳುʼ ಧಾರಾವಾಹಿಗೆ ಸಂಕಷ್ಟ!

Bigg Boss' dominates TRP; Sita Rama fell to the sixth position
ಕಿರುತೆರೆ8 months ago

Kannada Serials TRP: ಟಿಆರ್‌ಪಿಯಲ್ಲಿ ʻಬಿಗ್ ಬಾಸ್ʼದೇ ಮೇಲುಗೈ; 6ನೇ ಸ್ಥಾನಕ್ಕೆ ಕುಸಿದ ʻಸೀತಾ ರಾಮʼ

geetha serial Dhanush gowda engagement
ಕಿರುತೆರೆ6 months ago

Dhanush Gowda: ಗೀತಾ ಧಾರಾವಾಹಿ ನಟನ ನಿಶ್ಚಿತಾರ್ಥ; ಭವ್ಯಾಳ ಕಮೆಂಟ್‌ ಬಾಕ್ಸ್‌ ಆಫ್‌!

varun
ಕಿರುತೆರೆ7 months ago

Brindavana Serial: ʼಬೃಂದಾವನʼ ಧಾರಾವಾಹಿಯಲ್ಲಿ ದೊಡ್ಡ ಟ್ವಿಸ್ಟ್‌; ಪ್ರಮುಖ ಪಾತ್ರಧಾರಿಯೇ ಬದಲು

Kannada Serials
ಕಿರುತೆರೆ10 months ago

Kannada Serials TRP: ಟಿಆರ್‌ಪಿಯಲ್ಲಿ ಏರಿಕೆ ಕಂಡ ʻಅಮೃತಧಾರೆʼ; ʻಗಟ್ಟಿಮೇಳʼಕ್ಕೆ ನಾಲ್ಕನೇ ಸ್ಥಾನ!

karnataka Weather Forecast
ಮಳೆ2 days ago

Karnataka Weather : ಕರಾವಳಿಯಲ್ಲಿ ಮುಂದುವರಿದ ವರುಣಾರ್ಭಟ; ಸಾಂಪ್ರದಾಯಿಕ ಮೀನುಗಾರಿಕೆಗೂ ಬ್ರೇಕ್

karnataka weather Forecast
ಮಳೆ5 days ago

Karnataka Weather : ರಭಸವಾಗಿ ಹರಿಯುವ ನೀರಲ್ಲಿ ಸಿಲುಕಿದ ಬೊಲೆರೋ; ಬಿರುಗಾಳಿ ಸಹಿತ ಮಳೆ ಎಚ್ಚರಿಕೆ

International Yoga Day 2024
ಕರ್ನಾಟಕ5 days ago

International Yoga Day 2024: ಎಲ್ಲೆಲ್ಲೂ ಯೋಗಾಯೋಗ‌ಕ್ಕೆ ಮಂಡಿಯೂರಿದ ಜನತೆ

Karnataka Weather Forecast
ಮಳೆ6 days ago

Karnataka Weather : ಬಾಗಲಕೋಟೆ, ಬೆಂಗಳೂರು ಸೇರಿ ಚಿಕ್ಕಮಗಳೂರಲ್ಲಿ ಸುರಿದ ಗಾಳಿ ಸಹಿತ ಮಳೆ

Actor Darshan
ಮೈಸೂರು1 week ago

Actor Darshan : ಕೊಲೆ ಕೇಸ್‌ ಬೆನ್ನಲ್ಲೇ ನಟ ದರ್ಶನ್‌ ಸೇರಿ ಪತ್ನಿ ವಿಜಯಲಕ್ಷ್ಮಿಗೆ ಬಾರ್ ಹೆಡೆಡ್ ಗೂಸ್ ಸಂಕಷ್ಟ!

Bakrid 2024
ಬೆಂಗಳೂರು1 week ago

Bakrid 2024 : ಮತ್ತೊಂದು ಧರ್ಮವನ್ನೂ ಪ್ರೀತಿಸಿ; ಬಕ್ರೀದ್‌ ಪ್ರಾರ್ಥನೆಯಲ್ಲಿ ಸಿಎಂ ಸಿದ್ದರಾಮಯ್ಯ ಕರೆ

Renukaswamy murder case The location of the accused is complete
ಸಿನಿಮಾ1 week ago

Renuka Swamy murder : ಭೀಕರವಾಗಿ ಕೊಂದರೂ ಆರೋಪಿಗಳಿಗೆ ಕಾಡುತ್ತಿಲ್ವಾ ಪಾಪಪ್ರಜ್ಞೆ? ನಗುತ್ತಲೇ ಹೊರಬಂದ ಪವಿತ್ರಾ ಗೌಡ, ಪವನ್‌

Renuka swamy murder
ಚಿತ್ರದುರ್ಗ1 week ago

Renuka swamy Murder : ರೇಣುಕಾಸ್ವಾಮಿ ಕುಟುಂಬಸ್ಥರಿಗೆ ಸಾಂತ್ವನ ಹೇಳಿದ ಬಾಳೆಹೊನ್ನೂರು ಶ್ರೀಗಳು

Vijayanagara News
ವಿಜಯನಗರ1 week ago

Vijayanagara News : ಕೆಲಸಕ್ಕೆ ಚಕ್ಕರ್, ಸಂಬಳಕ್ಕೆ ಹಾಜರ್! ಹಾರಕನಾಳು ಗ್ರಾಪಂ ಪಿಡಿಓಗಾಗಿ ಗ್ರಾಮಸ್ಥರ ಹುಡುಕಾಟ

Actor Darshan
ಯಾದಗಿರಿ2 weeks ago

Actor Darshan : ಬಾಸ್‌ ಅಂತ ಯಾಕ್‌ ಬಕೆಟ್‌ ಹಿಡಿಯುತ್ತೀರಾ ಅಂದವನಿಗೆ ದರ್ಶನ್ ಅಭಿಮಾನಿಯಿಂದ ಜೀವ ಬೆದರಿಕೆ!

ಟ್ರೆಂಡಿಂಗ್‌