Karnataka Politics : ಮಾಜಿ ಸಿಎಂ ಬಸವರಾಜ ಬೊಮ್ಮಾಯಿಗೆ ಒಲಿಯಿತಾ ವಿಪಕ್ಷ ನಾಯಕ ಸ್ಥಾನ? - Vistara News

ಕರ್ನಾಟಕ

Karnataka Politics : ಮಾಜಿ ಸಿಎಂ ಬಸವರಾಜ ಬೊಮ್ಮಾಯಿಗೆ ಒಲಿಯಿತಾ ವಿಪಕ್ಷ ನಾಯಕ ಸ್ಥಾನ?

Karnataka Politics : ಮಾಜಿ ಸಿಎಂ ಬಸವರಾಜ ಬೊಮ್ಮಾಯಿ ಅವರು ಬಿಜೆಪಿ ಹೈಕಮಾಂಡ್‌ ಬುಲಾವ್‌ ಮೇರೆಗೆ ನವ ದೆಹಲಿ ತಲುಪಿದ್ದಾರೆ. ಸೋಮವಾರ ಅಮಿತ್‌ ಶಾ ಅವರನ್ನು ಭೇಟಿ ಮಾಡಿ ಚರ್ಚೆ ನಡೆಸಲಿದ್ದು, ಬಳಿಕ ಪಕ್ಷದ ರಾಷ್ಟ್ರೀಯ ಅಧ್ಯಕ್ಷ ಜೆಪಿ ನಡ್ಡಾ ಅವರ ಬಳಿ ಮಾತುಕತೆ ನಡೆಸಲಿದ್ದಾರೆ. ಹೀಗಾಗಿ ಇವರಿಗೇ ವಿಪಕ್ಷ ನಾಯಕ ಸ್ಥಾನ ಫಿಕ್ಸ್‌ ಆಯಿತೇ ಎಂಬ ಚರ್ಚೆ ಶುರುವಾಗಿದೆ.

VISTARANEWS.COM


on

former CM Basavaraj Bommai
ಮಹತ್ವದ, ಕುತೂಹಲಕರ ಸುದ್ದಿಗಾಗಿ ಫಾಲೊ ಮಾಡಿ
Koo

ಬೆಂಗಳೂರು: ಲೋಕಸಭಾ ಚುನಾವಣೆ (Lok Sabha Election 2024) ಹಿನ್ನೆಲೆಯಲ್ಲಿ ರಾಜ್ಯ ರಾಜಕಾರಣ (Karnataka Politics) ದಿನೇ ದಿನೆ ರಂಗು ಪಡೆದುಕೊಳ್ಳುತ್ತಿದೆ. ಈ ನಡುವೆ ಕೆಲವು ವಿಚಾರದಲ್ಲಿ ಬಿಜೆಪಿ ಹಿಂದೆ ಬಿದ್ದಿತ್ತು. ರಾಜ್ಯದಲ್ಲಿ ಕಾಂಗ್ರೆಸ್‌ ಸರ್ಕಾರ ರಚನೆಯಾಗಿ 2 ತಿಂಗಳು ಕಳೆದು ಮೂರನೇ ತಿಂಗಳಿಗೆ ಕಾಲಿಟ್ಟಿದ್ದರೂ ವಿರೋಧ ಪಕ್ಷದ ನಾಯಕನನ್ನು ಆಯ್ಕೆ ಮಾಡಿರಲಿಲ್ಲ. ಯಾರನ್ನು ಈ ಸ್ಥಾನದಲ್ಲಿ ಕೂರಿಸಬೇಕೆಂಬ ಬಗ್ಗೆ ವರಿಷ್ಠರು ಲೆಕ್ಕಾಚಾರದಲ್ಲಿ ತೊಡಗಿದ್ದರು. ಈಗ ಮಾಜಿ ಸಿಎಂ ಬಸವರಾಜ ಬೊಮ್ಮಾಯಿಗೆ ವಿಪಕ್ಷ ನಾಯಕ ಸ್ಥಾನ ಒಲಿಯಿತಾ ಎಂಬ ಚರ್ಚೆ ಹುಟ್ಟಿಕೊಂಡಿದ್ದು, ಬಿಜೆಪಿ ಹೈಕಮಾಂಡ್‌ ನಡೆ ಇದಕ್ಕೆ ಮತ್ತಷ್ಟು ಪುಷ್ಟೀಕರಣ ನೀಡಿದೆ.

ಬಿಜೆಪಿ ಹೈಕಮಾಂಡ್‌ ಬುಲಾವ್‌ ಮೇರೆಗೆ ದೆಹಲಿಗೆ ತೆರಳಿರುವ ಮಾಜಿ ಸಿಎಂ ಬಸವರಾಜ ಬೊಮ್ಮಾಯಿ ಸೋಮವಾರ ವರಿಷ್ಠರ ಜತೆ ಮಾತುಕತೆ ನಡೆಸಲಿದ್ದಾರೆ. ಈ ಮೂಲಕ ವಿಪಕ್ಷ ನಾಯಕನಾಗಿ ತಮ್ಮನ್ನು ಆಯ್ಕೆ ಮಾಡುವ ಚಿಂತನೆಯಲ್ಲಿದ್ದ ಬೊಮ್ಮಾಯಿಗೆ ನಿರೀಕ್ಷೆ ಹೆಚ್ಚಾಗಿದೆ.

ಕಳೆದ ಎರಡೂವರೆ ತಿಂಗಳಿನಿಂದ ಭೇಟಿ ಮಾಡದೆ ಸುಮ್ಮನಿದ್ದ ಹೈಕಮಾಂಡ್‌, ಈಗ ದಿಢೀರನೆ ನವದೆಹಲಿಗೆ ಕರೆಸಿಕೊಂಡಿದ್ದಾರೆ. ಪ್ರತಿಪಕ್ಷ ನಾಯಕನ ಆಯ್ಕೆ ಕುರಿತು ಬೊಮ್ಮಾಯಿ ಜತೆ ವರಿಷ್ಠರಿಂದ ಚರ್ಚೆ ನಡೆಯುವ ಸಾಧ್ಯತೆ ಇದೆ.

ಶಾ ಜತೆ ಮೊದಲ ಭೇಟಿ

ಸೋಮವಾರ (ಆಗಸ್ಟ್‌ 07) ಗೃಹ ಸಚಿವ ಅಮಿತ್‌ ಶಾ ಅವರನ್ನು ಮೊದಲಿಗೆ ಭೇಟಿ ಮಾಡಲಿರುವ ಬಸವರಾಜ ಬೊಮ್ಮಾಯಿ, ನಂತರ ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಜೆ.ಪಿ. ನಡ್ಡಾ ಜತೆ ಮಾತುಕತೆ ನಡೆಸಿದ್ದಾರೆ. ಈ ಹಿನ್ನೆಲೆಯಲ್ಲಿ ಒಂದೆರಡು ದಿನದಲ್ಲಿ ವಿಪಕ್ಷ ನಾಯಕ ಸ್ಥಾನದ ಕುರಿತು ನಿರ್ಧಾರ ಕೈಗೊಳ್ಳುವ ಸಾಧ್ಯತೆ ಇದೆ. ಬೊಮ್ಮಾಯಿ ಅವರನ್ನೇ ಘೋಷಣೆ ಮಾಡಲಾಗುತ್ತದೆಯೇ ಎಂಬ ಕುತೂಹಲ ಈಗ ಬಿಜೆಪಿ ವಲಯದಲ್ಲಿ ಮೂಡಿದೆ.

ನಾಯಕರೇ ಇಲ್ಲದಂತಾಗಿರುವ ಬಿಜೆಪಿ!

ಬಿಜೆಪಿಯಲ್ಲಿ ಈಗ ನಾಯಕರೇ ಇಲ್ಲದಂತಾಗಿದೆ. ಪ್ರಧಾನ ಕಾರ್ಯದರ್ಶಿಗಳಿಗೆ ಹಿರಿಯ ನಾಯಕರು ಕೇರ್‌ ಮಾಡುತ್ತಿಲ್ಲ ಎಂಬ ಆರೋಪ ಕೇಳಿಬರುತ್ತಿದೆ. ಅಧ್ಯಕ್ಷರ ಆಯ್ಕೆ ಆಗಿಲ್ಲದ ಕಾರಣಕ್ಕೆ ಪಕ್ಷದ ಆಗುಹೋಗುಗಳನ್ನು ಪ್ರಧಾನ ಕಾರ್ಯದರ್ಶಿಗಳು ನೋಡಿಕೊಳ್ಳುತ್ತಿದ್ದಾರೆ. ಬರ ಹಾಗೂ ನೆರೆಗೆ 7 ತಂಡಗಳನ್ನು ರಚಿಸಿದ್ದಕ್ಕೆ ಸ್ಪಂದನೆಯೇ ಇಲ್ಲದಂತಾಗಿದೆ. ಮಾಡೋಣ ಮಾಡೋಣ ಎನ್ನುತ್ತಲ್ಲೇ ಹಿರಿಯ ನಾಯಕರು ಕ್ಯಾರೆ ಎನ್ನುತ್ತಿಲ್ಲ.

ಇದನ್ನೂ ಓದಿ: Power point with HPK : ಸರ್ಕಾರಿ ಜಮೀನು ಒತ್ತುವರಿ ತೆರವಿಗೆ ವಿಶೇಷ ಟಾಸ್ಕ್‌ಫೋರ್ಸ್‌: ಕೃಷ್ಣ ಬೈರೇಗೌಡ

ಈಗ ಎಲ್ಲರೂ ಯಾರು ಅಧ್ಯಕ್ಷರಾಗುತ್ತಾರೆ ಹಾಗೂ ಪ್ರತಿಪಕ್ಷ ನಾಯಕ ಯಾರಾಗುತ್ತಾರೆ ಎಂದು ನೋಡುತ್ತಿದ್ದಾರೆ. ಯಾರು ಆಯ್ಕೆ ಆಗುತ್ತಾರೆ ಎನ್ನುವುದರ ಮೇಲೆ ಆ್ಯಕ್ಟಿವ್‌ ಆಗುವ ಆಲೋಚನೆಯನ್ನು ಹೊಂದಿದ್ದಾರೆ ಎನ್ನಲಾಗಿದೆ. ಈಗಲೇ ಪಕ್ಷದ ಚಟುವಟಿಕೆಯಲ್ಲಿ ಗುರುತಿಸಿಕೊಂಡರೆ ಒಂದು ಗುಂಪಿನ ಪರ ಆಗಬಹುದು ಎಂಬ ಆಲೋಚನೆ ಇವರದ್ದಾಗಿದೆ. ಇನ್ನು ಪಕ್ಷದ ಕಚೇರಿ ಕಡೆಗೂ ಅನೇಕರು ಆಗಮಿಸುತ್ತಿಲ್ಲ. ಅಲ್ಲದೆ, ವಲಸೆ ಹಕ್ಕಿಗಳು ಸೇರಿ ಅನೇಕರು ಪಕ್ಷದ ಕಾರ್ಯಕ್ರಮಗಳಲ್ಲಿ ಭಾಗವಹಿಸುತ್ತಿಲ್ಲ. ಈ ಹಿನ್ನೆಲೆಯಲ್ಲಿ ಬಸವರಾಜ ಬೊಮ್ಮಾಯಿ ನವದೆಹಲಿ ಭೇಟಿ ನಿರೀಕ್ಷೆ ಮೂಡಿಸಿದೆ. ಇದೇ ವಾರದಲ್ಲಿ ವಿಪಕ್ಷ ನಾಯಕ ಹಾಗೂ ರಾಜ್ಯ ಅಧ್ಯಕ್ಷ ಸ್ಥಾನದ ಕುರಿತು ನಿರ್ಧಾರ ಆಗುವ ಸಾಧ್ಯತೆ ಇದೆ.

ಕ್ಷಣ ಕ್ಷಣದ ಮಾಹಿತಿಗಾಗಿ Vistara News FaceBook ಪೇಜ್ ಫಾಲೋ ಮಾಡಿ
ಮಹತ್ವದ ಮಾಹಿತಿಗಾಗಿ ವಿಸ್ತಾರ ನ್ಯೂಸ್ ಆ್ಯಪ್ ಉಚಿತವಾಗಿ ಡೌನ್ ಲೋಡ್ ಮಾಡಿಕೊಳ್ಳಿ: Andriod App | IOS App
Continue Reading
Click to comment

Leave a Reply

Your email address will not be published. Required fields are marked *

ಕರ್ನಾಟಕ

Actor Chikkanna: ದರ್ಶನ್‌ ಊಟಕ್ಕೆ ಕರೆದಿದ್ರು, ಹೋಗಿದ್ದೆ; ಪೊಲೀಸ್‌ ವಿಚಾರಣೆ ಬಳಿಕ ಚಿಕ್ಕಣ್ಣ ಫಸ್ಟ್‌ ರಿಯಾಕ್ಷನ್!

Actor Chikkanna: Actor Chikkanna: ರೇಣುಕಾಸ್ವಾಮಿ ಕೊಲೆಯಾದ ದಿನವೇ ಅಂದರೆ, ಜೂನ್‌ 8ರಂದು ನಟ ದರ್ಶನ್‌ ಜತೆ ಪಾರ್ಟಿ ಮಾಡಿರುವುದು ನಿಜ ಎಂಬುದಾಗಿ ನಟ ಚಿಕ್ಕಣ್ಣ ಒಪ್ಪಿಕೊಂಡಿದ್ದಾರೆ. ಸ್ಟೋನಿ ಬ್ರೂಕ್‌ ರೆಸ್ಟೋರೆಂಟ್‌ನಲ್ಲಿ ಪೊಲೀಸರು ಮಹಜರು ಮಾಡುವ ವೇಳೆ ಪಬ್‌ಗೆ ತೆರಳಿದ ಚಿಕ್ಕಣ್ಣ, ಪಾರ್ಟಿಯ ಕುರಿತು ಮಾಹಿತಿ ನೀಡಿದ್ದಾರೆ. ಇದಾದ ಬಳಿಕ ಚಿಕ್ಕಣ್ಣ ಅವರು ಪೊಲೀಸ್‌ ಠಾಣೆಗೂ ತೆರಳಿ, ಸುಮಾರು ಮೂರು ತಾಸು ವಿಚಾರಣೆ ಎದುರಿಸಿದ್ದಾರೆ.

VISTARANEWS.COM


on

Actor Chikkanna
Koo

ಬೆಂಗಳೂರು: ಚಿತ್ರದುರ್ಗದ ರೇಣುಕಾಸ್ವಾಮಿ ಕೊಲೆ ಪ್ರಕರಣಕ್ಕೆ (Renukaswamy Murder Case) ಸಂಬಂಧಿಸಿದಂತೆ ನಟ ಚಿಕ್ಕಣ್ಣ (Actor Chikkanna) ಅವರನ್ನೂ ಕಾಮಾಕ್ಷಿಪಾಳ್ಯ ಪೊಲೀಸರು ವಿಚಾರಣೆ ನಡೆಸಿದ್ದಾರೆ. ರೇಣುಕಾಸ್ವಾಮಿ ಕೊಲೆಯಾದ ದಿನವಾದ ಜೂನ್‌ 8ರಂದೇ ಕೊಲೆ ಆರೋಪಿ ನಟ ದರ್ಶನ್‌ (Actor Darshan) ಜತೆಗೆ ಚಿಕ್ಕಣ್ಣ ಪಾರ್ಟಿ ಮಾಡಿದ ಹಿನ್ನೆಲೆಯಲ್ಲಿ ಪೊಲೀಸರು ನೋಟಿಸ್‌ ನೀಡಿದ್ದು, ಅದರಂತೆ ಚಿಕ್ಕಣ್ಣ ಅವರು ವಿಚಾರಣೆಗೆ ಹಾಜರಾದರು. ಸುಮಾರು ಮೂರು ತಾಸಿನ ವಿಚಾರಣೆ ಬಳಿಕ ಮಾಧ್ಯಮಗಳಿಗೆ ಪ್ರತಿಕ್ರಿಯಿಸಿದ ಚಿಕ್ಕಣ್ಣ, “ದರ್ಶನ್‌ ಅವರು ಜೂನ್‌ 8ರಂದು ಊಟಕ್ಕೆ ಕರೆದಿದ್ರು, ಹೋಗಿದ್ದೆ” ಎಂದಷ್ಟೇ ತಿಳಿಸಿದ್ದಾರೆ.

“ಸಾಮಾನ್ಯವಾಗಿ ದರ್ಶನ್‌ ಅವರು ನನ್ನನ್ನು ಊಟಕ್ಕೆ ಕರೆಯುತ್ತಾರೆ. ಅದರಂತೆ, ಜೂನ್‌ 8ರಂದು ಸ್ಟೋನಿ ಬ್ರೂಕ್‌ ರೆಸ್ಟೋರೆಂಟ್‌ಗೆ ಊಟಕ್ಕೆ ಹೋಗಿದ್ದೆ. ಊಟ ಮುಗಿಸಿಕೊಂಡು ನಾನು ಅಲ್ಲಿಂದ ತೆರಳಿದೆ. ಅದಕ್ಕೆ ಸಂಬಂಧಿಸಿದಂತೆ ಪೊಲೀಸರು ಕರೆದಿದ್ದರು” ಎಂಬುದಾಗಿ ಚಿಕ್ಕಣ್ಣ ಮೊದಲ ಪ್ರತಿಕ್ರಿಯೆ ನೀಡಿದರು. “ದರ್ಶನ್‌ ಜತೆ ಊಟಕ್ಕೆ ಹೋದಾಗ ಯಾರ‍್ಯಾರು ಇದ್ದರು” ಎಂದು ಮಾಧ್ಯಮದವರು ಕೇಳಿದ್ದಕ್ಕೆ, “ಪ್ರಕರಣವು ವಿಚಾರಣೆ ಹಂತದಲ್ಲಿದೆ. ನಾನು ಇದುವರೆಗೆ ವಿಚಾರಣೆಗೆ ಸಹಕರಿಸಿದ್ದೇನೆ. ಇದಕ್ಕಿಂತ ಹೆಚ್ಚೇನೂ ಹೇಳಲು ಆಗುವುದಿಲ್ಲ” ಎಂಬುದಾಗಿ ಪ್ರತಿಕ್ರಿಯಿಸಿದರು.

ರೇಣುಕಾಸ್ವಾಮಿ ಕೊಲೆಗೀಡಾದ ದಿನವೇ ಸ್ಟೋನಿ ಬ್ರೂಕ್‌ನಲ್ಲಿ ದರ್ಶನ್‌ ಸೇರಿ ಹಲವರು ಪಾರ್ಟಿ ಮಾಡಿದ ಹಿನ್ನೆಲೆಯಲ್ಲಿ ಪೊಲೀಸರು ಆರೋಪಿಗಳನ್ನು ಸ್ಟೋನಿ ಬ್ರೂಕ್‌ ರೆಸ್ಟೋರೆಂಟ್‌ಗೆ ಕರೆದುಕೊಂಡು ಹೋಗಿ ಸ್ಥಳ ಮಹಜರು ಮಾಡಿದ್ದಾರೆ. ಪ್ರಕರಣಕ್ಕೆ ಸಂಬಂಧಿಸಿದಂತೆ ಚಿಕ್ಕಣ್ಣ ಅವರೂ ಸ್ಥಳ ಮಹಜರಿನ ವೇಳೆ ಸ್ಟೋನಿ ಬ್ರೂಕ್‌ ರೆಸ್ಟೋರೆಂಟ್‌ಗೆ ಭೇಟಿ ನೀಡಿದ್ದಾರೆ. ಅಲ್ಲಿಯೇ, ದರ್ಶನ್‌ ಜತೆ ಪಾರ್ಟಿ ಮಾಡಿರುವುದನ್ನು ಚಿಕ್ಕಣ್ಣ ಪೊಲೀಸರ ಎದುರು ಒಪ್ಪಿಕೊಂಡಿದ್ದಾರೆ.

“ಜೂನ್‌ 8ರಂದು ಆರ್‌ ಆರ್‌ ನಗರದ ಸ್ಟೋನಿ ಬ್ರೂಕ್‌ ಪಬ್‌ಗೆ ಹೋಗಿದ್ದೆ. ಮಧ್ಯಾಹ್ನ 1.30ರ ಸುಮಾರಿಗೆ ಪಬ್‌ಗೆ ಹೋಗಿದ್ದೆ. ದರ್ಶನ್‌ ಹಾಗೂ ನಾನು ಒಂದೇ ಟೇಬಲ್‌ನಲ್ಲಿ ಪಾರ್ಟಿ ಮಾಡಿದ್ವಿ. ಸಂಜೆ 4.30ರ ಸುಮಾರಿಗೆ ದರ್ಶನ್‌ ಅವರು ಪಬ್‌ನಿಂದ ಹೊರಟರು. ಅವರ ಜತೆ ನಾನೂ ಅಲ್ಲಿಂದ ಹೊರಟೆ. ನಾನು ನಮ್ಮ ಮನೆಗೆ ಹೋದೆ, ದರ್ಶನ್‌ ಅವರು ಎಲ್ಲಿಗೆ ಹೋದರೋ ಗೊತ್ತಿಲ್ಲ. ನಾವು ಸಿನಿಮಾ ವಿಚಾರಕ್ಕಾಗಿ ಭೇಟಿ ಮಾಡಿದ್ವಿ. ಅದಷ್ಟೇ ಮಾತನಾಡಿ ನಾವು ಹೊರಟು ಹೋದೆವು” ಎಂಬುದಾಗಿ ಪೊಲೀಸರಿಗೆ ಚಿಕ್ಕಣ್ಣ ಮಾಹಿತಿ ನೀಡಿದ್ದಾರೆ.

ನಟ ದರ್ಶನ್‌ ಸೇರಿ ಹಲವು ಆರೋಪಿಗಳನ್ನು ಸ್ಟೋನಿ ಬ್ರೂಕ್‌ ರೆಸ್ಟೋರೆಂಟ್‌ಗೆ ಕರೆದುಕೊಂಡ ಹೋದ ಪೊಲೀಸರು ಸ್ಥಳ ಮಹಜರು ಮಾಡಿದ್ದಾರೆ. ಇದಾದ ನಂತರ ಚಿಕ್ಕಣ್ಣ ಅವರು ಕೂಡ ಕಾಮಾಕ್ಷಿಪಾಳ್ಯ ಪೊಲೀಸ್‌ ಠಾಣೆಗೆ ತೆರಳಿ ಹೇಳಿಕೆ ದಾಖಲಿಸಿದ್ದಾರೆ ಎಂದು ತಿಳಿದುಬಂದಿದೆ. ಚಿಕ್ಕಣ್ಣ ಅವರು ಪೊಲೀಸ್‌ ಠಾಣೆಗೆ ಹೋದ ವಿಡಿಯೊ ಕೂಡ ಲಭ್ಯವಾಗಿದೆ. ಪಾರ್ಟಿ ಹಿನ್ನೆಲೆಯಲ್ಲಿ ನಟ ಚಿಕ್ಕಣ್ಣ ಅವರಿಗೆ ಇದಕ್ಕೂ ಮೊದಲು ಕಾಮಾಕ್ಷಿಪಾಳ್ಯ ಠಾಣೆ ಪೊಲೀಸರು ನೋಟಿಸ್‌ ನೀಡಿದ್ದರು. ಇದು ಚಿಕ್ಕಣ್ಣ ಅವರಿಗೂ ಆತಂಕ ತಂದಿತ್ತು ಎನ್ನಲಾಗಿದೆ.

ಇದನ್ನೂ ಓದಿ: Actor Darshan: ಅಂದು `ತಗಡು’ ಅಂದಿದ್ದ ದರ್ಶನ್‌ಗೆ ಇಂದು ಉಮಾಪತಿ ಕೌಂಟರ್!

Continue Reading

ಕರ್ನಾಟಕ

Kalki 2898 AD: ʼಕಲ್ಕಿ 2898 ADʼ ಚಿತ್ರದ ಭೈರವ ಆಂಥಮ್‌ ರಿಲೀಸ್‌!

Kalki 2898 AD: ಪ್ರಭಾಸ್‌, ಅಮಿತಾಭ್ ಬಚ್ಚನ್, ಕಮಲ್ ಹಾಸನ್, ದೀಪಿಕಾ ಪಡುಕೋಣೆ ಮತ್ತು ದಿಶಾ ಪಟಾನಿ ನಟಿಸಿರುವ ‘ಕಲ್ಕಿ 2898 AD’ ಚಿತ್ರದ ಟ್ರೈಲರ್ ಬಿಡುಗಡೆಯ ಬಳಿಕ ಇದೀಗ ಇದೇ ಚಿತ್ರದ ಭೈರವ ಆಂಥಮ್‌ ಬಿಡುಗಡೆಯಾಗಿದೆ. ವೈಜಯಂತಿ ಮೂವೀಸ್‌ ಯೂಟ್ಯೂಬ್‌ ಚಾನಲ್‌ನಲ್ಲಿ ಹಾಡು ರಿಲೀಸ್‌ ಆಗಿದೆ. ನಟ ಪ್ರಭಾಸ್‌ ನಟಿಸಿರುವ ಈ ಚಿತ್ರದ ಹಾಡಿಗೆ ಮೊದಲ ಸಲ ಪಂಜಾಬಿ ಗಾಯಕ ದಿಲ್ಜಿತ್‌ ದೋಸಾಂಜ್‌ ಧ್ವನಿ ನೀಡಿದ್ದಾರೆ. ಸಂತೋಷ್‌ ನಾರಾಯಣನ್‌ ಈ ಹಾಡಿಗೆ ಸಂಗೀತ ನೀಡಿದ್ದಾರೆ.

VISTARANEWS.COM


on

Kalki 2898 AD Movie Bhairava Anthem Released
Koo

ಬೆಂಗಳೂರು: ಪ್ರಭಾಸ್‌, ಅಮಿತಾಭ್ ಬಚ್ಚನ್, ಕಮಲ್ ಹಾಸನ್, ದೀಪಿಕಾ ಪಡುಕೋಣೆ ಮತ್ತು ದಿಶಾ ಪಟಾನಿ ನಟಿಸಿರುವ ‘ಕಲ್ಕಿ 2898 AD’ ಚಿತ್ರದ ಟ್ರೈಲರ್ ಬಿಡುಗಡೆಯ ಬಳಿಕ ಇದೀಗ ಇದೇ ಚಿತ್ರದ ಭೈರವ ಆಂಥಮ್‌ ಬಿಡುಗಡೆಯಾಗಿದೆ. ವೈಜಯಂತಿ ಮೂವೀಸ್‌ ಯೂಟ್ಯೂಬ್‌ ಚಾನಲ್‌ನಲ್ಲಿ ಹಾಡು ರಿಲೀಸ್‌ ಆಗಿದೆ. ನಟ ಪ್ರಭಾಸ್‌ ನಟಿಸಿರುವ ಈ ಚಿತ್ರದ ಹಾಡಿಗೆ ಮೊದಲ ಸಲ ಪಂಜಾಬಿ ಗಾಯಕ ದಿಲ್ಜಿತ್‌ ದೋಸಾಂಜ್‌ ಧ್ವನಿ ನೀಡಿದ್ದಾರೆ. ಸಂತೋಷ್‌ ನಾರಾಯಣನ್‌ ಈ ಹಾಡಿಗೆ ಸಂಗೀತ ನೀಡಿದ್ದಾರೆ.

ಪಕ್ಕಾ ಮಾಸ್‌ ಅವತಾರದಲ್ಲಿ ನಟ ಪ್ರಭಾಸ್‌ ಈ ಹಾಡಿನಲ್ಲಿ ಎದುರಾಗಿದ್ದಾರೆ. ತಲೆಗೆ ಟರ್ಬನ್‌ ಧರಿಸಿ ಮತ್ತು ಪಂಚೆಯಲ್ಲಿ ಮಿಂಚಿದ್ದಾರೆ. ಈಗಾಗಲೇ ಟ್ರೇಲರ್‌ ಮೂಲಕ ಎಲ್ಲರ ಗಮನ ಸೆಳೆದ ಈ ಸಿನಿಮಾ, ಇದೀಗ ಭೈರವ ಆಂಥಮ್‌ ಮೂಲಕ ಕಿಕ್‌ ಹೆಚ್ಚಿಸುತ್ತಿದೆ. ತೆಲುಗು ಮಾತ್ರವಲ್ಲದೆ ಹಿಂದಿ, ತಮಿಳು, ಮಲಯಾಳಂ, ಕನ್ನಡ ಮತ್ತು ಇಂಗ್ಲಿಷ್ ಸೇರಿದಂತೆ ಬಹು ಭಾಷೆಗಳಲ್ಲಿ ಈ ಸಿನಿಮಾ ಬಿಡುಗಡೆಯಾಗಲಿದೆ.

ಇದನ್ನೂ ಓದಿ: Job Recruitment: ಕರ್ನಾಟಕ ಗ್ರಾಮೀಣ ಬ್ಯಾಂಕ್‌ನಲ್ಲಿ 586 ಹುದ್ದೆಗಳಿಗೆ ಅರ್ಜಿ ಆಹ್ವಾನ

ಈ ವರ್ಷದ ಅತೀ ನಿರೀಕ್ಷಿತ ಚಿತ್ರ ಎಂಬ ಹೆಗ್ಗಳಿಕೆಗೆ ಪಾತ್ರವಾಗಿರುವ ‘ಕಲ್ಕಿ 2898 AD’ ಚಿತ್ರದಲ್ಲಿ ಅಮಿತಾಭ್‍ ಬಚ್ಚನ್, ಕಮಲ್ ಹಾಸನ್, ಪ್ರಭಾಸ್,‍ ದೀಪಿಕಾ ಪಡುಕೋಣೆ, ದಿಶಾ ಪಠಾಣಿ ಮುಂತಾದವರು ನಟಿಸಿದ್ದಾರೆ. ವೈಜಯಂತಿ ಮೂವೀಸ್ ಬ್ಯಾನರ್‌ನಡಿ ಅಶ್ವಿನಿ ದತ್‍ ನಿರ್ಮಿಸಿರುವ ಈ ಚಿತ್ರವನ್ನು ನಾಗ್‍ ಅಶ್ವಿನ್‍ ನಿರ್ದೇಶನ ಮಾಡಿದ್ದಾರೆ. ‘ಕಲ್ಕಿ 2898 AD’ ಚಿತ್ರವು ಜಗತ್ತಿನಾದ್ಯಂತ ಜೂನ್‍ 27ರಂದು ಬಿಡುಗಡೆ ಆಗಲಿದೆ.

Continue Reading

ತುಮಕೂರು

Shira News: ಶಿರಾಕ್ಕೆ ಕೇಂದ್ರ ಸಚಿವ ಎಚ್‌.ಡಿ.ಕುಮಾರಸ್ವಾಮಿ ಭೇಟಿ

Shira News: ಕೇಂದ್ರ ಉಕ್ಕು ಹಾಗೂ ಬೃಹತ್‌ ಕೈಗಾರಿಕಾ ಸಚಿವರಾಗಿ ಅಧಿಕಾರ ಸ್ವೀಕರಿಸಿದ ಬಳಿಕ ಪ್ರಥಮ ಬಾರಿಗೆ ಶಿರಾ ನಗರಕ್ಕೆ ಸೋಮವಾರ ಬೆಳಿಗ್ಗೆ ಭೇಟಿ ನೀಡಿದ ಎಚ್‌.ಡಿ.ಕುಮಾರಸ್ವಾಮಿ ಅವರನ್ನು ಜೆಡಿಎಸ್‌ ಹಾಗೂ ಬಿಜೆಪಿ ಕಾರ್ಯಕರ್ತರು, ಅಭಿಮಾನಿಗಳು ಅದ್ಧೂರಿಯಾಗಿ ಸ್ವಾಗತಿಸಿದರು.

VISTARANEWS.COM


on

Union Minister HD Kumaraswamy visit Shira
Koo

ಶಿರಾ: ಕೇಂದ್ರ ಉಕ್ಕು ಹಾಗೂ ಬೃಹತ್‌ ಕೈಗಾರಿಕಾ ಸಚಿವರಾಗಿ ಅಧಿಕಾರ ಸ್ವೀಕರಿಸಿದ ಬಳಿಕ ಪ್ರಥಮ ಬಾರಿಗೆ ಶಿರಾ ನಗರಕ್ಕೆ (Shira News) ಸೋಮವಾರ ಬೆಳಿಗ್ಗೆ ಭೇಟಿ ನೀಡಿದ ಎಚ್‌.ಡಿ. ಕುಮಾರಸ್ವಾಮಿ ಅವರನ್ನು ಜೆಡಿಎಸ್‌ ಹಾಗೂ ಬಿಜೆಪಿ ಕಾರ್ಯಕರ್ತರು, ಅಭಿಮಾನಿಗಳು ಅದ್ಧೂರಿಯಾಗಿ ಸ್ವಾಗತಿಸಿದರು.

ಮೊದಲಿಗೆ ತಾಲೂಕಿನ ಪಟ್ಟನಾಯಕನಹಳ್ಳಿಯ ಶ್ರೀ ಗುರುಗುಂಡ ಬ್ರಹ್ಮೇಶ್ವರ ಸ್ವಾಮಿ ಮಠದಲ್ಲಿರುವ ಓಂಕಾರೇಶ್ವರ ಸ್ವಾಮಿಗೆ ಪೂಜೆ ಸಲ್ಲಿಸಿದರು. ಬಳಿಕ ಮಠದ ಶ್ರೀ ನಂಜಾವಧೂತ ಸ್ವಾಮೀಜಿ ಅವರನ್ನು ಭೇಟಿ ಮಾಡಿ, ಆಶೀರ್ವಾದ ಪಡೆದರು.

ಇದನ್ನೂ ಓದಿ: Job Recruitment: ಕರ್ನಾಟಕ ಗ್ರಾಮೀಣ ಬ್ಯಾಂಕ್‌ನಲ್ಲಿ 586 ಹುದ್ದೆಗಳಿಗೆ ಅರ್ಜಿ ಆಹ್ವಾನ

ಇದಕ್ಕೂ ಮೊದಲು ಶಿರಾ ನಗರದಲ್ಲಿ ಮಾತನಾಡಿದ ಕೇಂದ್ರ ಸಚಿವ ಎಚ್‌.ಡಿ. ಕುಮಾರಸ್ವಾಮಿ ಅವರು, ಕೇಂದ್ರ ಸರ್ಕಾರದಲ್ಲಿ 2 ಕಠಿಣ ಇಲಾಖೆಗಳನ್ನು ನಿಭಾಯಿಸುವ ಹೊಣೆಗಾರಿಕೆ ಸಿಕ್ಕಿದೆ. ಜತೆಗೆ ರಾಜ್ಯಕ್ಕೆ ಉತ್ತಮ ಕೊಡುಗೆ ನೀಡುವ ಅವಕಾಶವೂ ದೊರಕಿದೆ. ಸಿಕ್ಕಿರುವ ಅಧಿಕಾರವನ್ನು ಸಮರ್ಥವಾಗಿ ಬಳಸಿಕೊಂಡು ರಾಜ್ಯ ಮತ್ತು ಜಿಲ್ಲೆಯ ಅಭಿವೃದ್ಧಿಗೆ ಪೂರಕವಾದ ಯೋಜನೆಗಳನ್ನು ನೀಡುವುದಾಗಿ ಭರವಸೆ ನೀಡಿದರು.

ಇದೇ ವೇಳೆ ಜೆಡಿಎಸ್‌ ಯುವ ಘಟಕದ ರಾಜ್ಯಾಧ್ಯಕ್ಷ ನಿಖಿಲ್ ಕುಮಾರಸ್ವಾಮಿ ಮಾತನಾಡಿ, ಪ್ರಧಾನಿ ನರೇಂದ್ರ ಮೋದಿ ಅವರು ತಮ್ಮ ತಂದೆ ಎಚ್‌.ಡಿ. ಕುಮಾರಸ್ವಾಮಿ ಅವರ ನಾಯಕತ್ವವನ್ನು ಗುರುತಿಸಿದ್ದಾರೆ. ರಾಷ್ಟ್ರಮಟ್ಟದಲ್ಲಿ ಜವಾಬ್ದಾರಿಯನ್ನು ನೀಡಲಾಗಿದೆ. ಅವರು ಇಂದು ಕೇಂದ್ರ ಸಚಿವರಾಗಿದ್ದು, ದೇಶ ಮತ್ತು ರಾಜ್ಯಕ್ಕಾಗಿ ಸೇವೆ ಸಲ್ಲಿಸಲಿದ್ದಾರೆ ಎಂದು ತಿಳಿಸಿದ ಅವರು, ತಮ್ಮ ನಿರೀಕ್ಷೆಗಳನ್ನು ಅತ್ಯಂತ ಜವಾಬ್ದಾರಿಯುತವಾಗಿ ಪೂರೈಸುತ್ತಾರೆ ಎಂದು ನಿಖಿಲ್ ಕುಮಾರಸ್ವಾಮಿ ತಿಳಿಸಿದರು.

ಇದನ್ನೂ ಓದಿ: Karnataka Weather : ಬೆಂಗಳೂರು, ಚಿಕ್ಕಮಗಳೂರಲ್ಲಿ ಸುರಿದ ಧಾರಾಕಾರ ಮಳೆ

ಈ ಸಂದರ್ಭದಲ್ಲಿ ಚಿತ್ರದುರ್ಗ ಸಂಸದ ಗೋವಿಂದ ಕಾರಜೋಳ, ಜೆಡಿಎಸ್‌ ಮುಖಂಡ ಆರ್.ಉಗ್ರೇಶ್‌, ಜೆಡಿಎಸ್‌ ಪಕ್ಷದ ತಾಲೂಕು ಘಟಕದ ಅಧ್ಯಕ್ಷ ಸತ್ಯಪ್ರಕಾಶ್‌ ಸೇರಿದಂತೆ ಬಿಜೆಪಿ ಮತ್ತು ಜೆಡಿಎಸ್‌ ಪಕ್ಷದ ಮುಖಂಡರು ಹಾಗೂ ಕಾರ್ಯಕರ್ತರು, ಇತರರು ಉಪಸ್ಥಿತರಿದ್ದರು.

Continue Reading

ಬೆಳಗಾವಿ

Belagavi News: ಕನ್ನಡ ಶಾಲೆಗಳಿಗೆ ಮರಾಠಿ ಶಿಕ್ಷಕರು! ಮುಖ್ಯಮಂತ್ರಿಗಳೇ ಗಮನ ಹರಿಸಿ

Belagavi News: ಕರ್ನಾಟಕ ಸರ್ಕಾರವು ಮಹಾರಾಷ್ಟ್ರಕ್ಕೆ ಹೊಂದಿಕೊಂಡಿರುವ ಗಡಿ ಭಾಗದ ಎಲ್ಲ ಮರಾಠಿ ಶಾಲೆಗಳಿಗೆ ಸರ್ವ ರೀತಿಯ ಸೌಲಭ್ಯಗಳನ್ನು ಒದಗಿಸುತ್ತಿದೆ. ರಾಜ್ಯದಲ್ಲಿ ಭಾಷಾ ಅಲ್ಪಸಂಖ್ಯಾತರ ಹಿತವನ್ನು ಗಮನದಲ್ಲಿಟ್ಟುಕೊಂಡು ಮರಾಠಿ ಭಾಷಿಕರ ಶಾಲೆಗಳಿಗೆ ಮರಾಠಿ ಶಿಕ್ಷಕರನ್ನೇ ನೇಮಿಸುತ್ತ ಬಂದಿದೆ. ಇದಕ್ಕೆ ತದ್ವಿರುದ್ಧವಾಗಿ ಮಹಾರಾಷ್ಟ್ರದ ಸೊಲ್ಲಾಪುರ ಮತ್ತು ಸಾಂಗ್ಲಿ ಜಿಲ್ಲೆಗಳ ಕನ್ನಡ ಶಾಲೆಗಳಿಗೆ ಮರಾಠಿ ಶಿಕ್ಷಕರನ್ನು ನೇಮಿಸುವ ಮೂಲಕ ಅಲ್ಲಿಯ ಕನ್ನಡಿಗರ ಹಿತಕ್ಕೆ ಧಕ್ಕೆ ತರುವಂಥ ಕನ್ನಡಿಗರ ಹಾಗೂ ಕನ್ನಡ ವಿರೋಧಿ ನಿಲುವನ್ನು ಮಹಾರಾಷ್ಟ್ರ ಸರ್ಕಾರ ತಳೆಯುತ್ತಿದೆ.

VISTARANEWS.COM


on

Maharashtra government appoints Marathi teachers to Kannada schools; Ashoka Chandragi wrote a letter to CM Siddaramaiah
Koo

ಬೆಳಗಾವಿ: ಮಹಾರಾಷ್ಟ್ರದ ಸೊಲ್ಲಾಪುರ ಮತ್ತು ಸಾಂಗ್ಲಿ ಜಿಲ್ಲೆಗಳಲ್ಲಿಯ ಕನ್ನಡ ಶಾಲೆಗಳಿಗೆ (Kannada Schools) ಮರಾಠಿ ಶಿಕ್ಷಕರನ್ನು ನೇಮಿಸುವ ಮೂಲಕ ಕನ್ನಡಿಗರ ಸಂಸ್ಕೃತಿ ಮತ್ತು ಪರಂಪರೆಯ ಹಾಳು ಮಾಡುತ್ತಿರುವ ಮಹಾರಾಷ್ಟ್ರ ಸರ್ಕಾರದ (Maharashtra Government) ಕನ್ನಡ ವಿರೋಧಿ ನೀತಿಯನ್ನು ಪ್ರತಿಭಟಿಸುವ ಕುರಿತು ಈಗ ಕನ್ನಡಿಗರು ರಾಜ್ಯದ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರಿಗೆ ಪತ್ರ (Belagavi News) ಬರೆದಿದ್ದಾರೆ.

ಈ ಬಗ್ಗೆ ಬೆಳಗಾವಿ ಜಿಲ್ಲಾ ಕನ್ನಡ ಸಂಘಟನೆಗಳ ಕ್ರಿಯಾ ಸಮಿತಿ ಅಧ್ಯಕ್ಷ ಅಶೋಕ ಚಂದರಗಿ ಹಾಗೂ ಇತರರು, ರಾಜ್ಯದ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರಿಗೆ ಪತ್ರ ಬರೆದು ಈ ಕುರಿತು ಗಮನ ಹರಿಸುವಂತೆ ಮನವಿ ಮಾಡಿಕೊಂಡಿದ್ದಾರೆ.

ಇದನ್ನೂ ಓದಿ: NEETPG 2024 : ಜೂ.23ಕ್ಕೆ ನೀಟ್‌ ಪಿಜಿ ಪರೀಕ್ಷೆ; ನಾಳೆಯಿಂದಲೇ ಪ್ರವೇಶ ಪತ್ರ ಬಿಡುಗಡೆ

ಕರ್ನಾಟಕ ಸರ್ಕಾರವು ಮಹಾರಾಷ್ಟ್ರಕ್ಕೆ ಹೊಂದಿಕೊಂಡಿರುವ ಗಡಿ ಭಾಗದ ಎಲ್ಲ ಮರಾಠಿ ಶಾಲೆಗಳಿಗೆ ಸರ್ವ ರೀತಿಯ ಸೌಲಭ್ಯಗಳನ್ನು ಒದಗಿಸುತ್ತಿದೆ. ರಾಜ್ಯದಲ್ಲಿ ಭಾಷಾ ಅಲ್ಪಸಂಖ್ಯಾತರ ಹಿತವನ್ನು ಗಮನದಲ್ಲಿಟ್ಟುಕೊಂಡು ಮರಾಠಿ ಭಾಷಿಕರ ಶಾಲೆಗಳಿಗೆ ಮರಾಠಿ ಶಿಕ್ಷಕರನ್ನೇ ನೇಮಿಸುತ್ತ ಬಂದಿದೆ. ಇದಕ್ಕೆ ತದ್ವಿರುದ್ಧವಾಗಿ ಮಹಾರಾಷ್ಟ್ರದ ಸೊಲ್ಲಾಪುರ ಮತ್ತು ಸಾಂಗ್ಲಿ ಜಿಲ್ಲೆಗಳ ಕನ್ನಡ ಶಾಲೆಗಳಿಗೆ ಮರಾಠಿ ಶಿಕ್ಷಕರನ್ನು ನೇಮಿಸುವ ಮೂಲಕ ಅಲ್ಲಿಯ ಕನ್ನಡಿಗರ ಹಿತಕ್ಕೆ ಧಕ್ಕೆ ತರುವಂಥ ಕನ್ನಡಿಗರ ಹಾಗೂ ಕನ್ನಡ ವಿರೋಧಿ ನಿಲುವನ್ನು ಮಹಾರಾಷ್ಟ್ರ ಸರ್ಕಾರ ತಳೆಯುತ್ತಿದೆ ಎಂದು ಹೇಳಿದ್ದಾರೆ.

ಸಾಂಗ್ಲಿ ಜಿಲ್ಲಾ ಪಂಚಾಯಿತಿಯು ಇತ್ತೀಚೆಗೆ ಕನ್ನಡ ಶಾಲೆಗಳಿಗಾಗಿ ನೇಮಕ ಮಾಡಿದ 24 ಶಿಕ್ಷಕರ ಪೈಕಿ ಕೇವಲ ನಾಲ್ವರು ಮಾತ್ರ ಕನ್ನಡಿಗರಾಗಿದ್ದಾರೆ. ಕನ್ನಡ ಡಿ.ಎಡ್. ಪದವಿ ಪಡೆದ ನೂರಾರು ಶಿಕ್ಷಕರು ಕನ್ನಡ ಪ್ರದೇಶಗಳಲಿದ್ದು ಅವರನ್ನು ಕನ್ನಡ ಶಾಲೆಗಳಿಗೆ ನೇಮಕ ಮಾಡದೇ ಮರಾಠಿ ಶಿಕ್ಷಕರನ್ನು ನೇಮಕ ಮಾಡುತ್ತಿರುವ ಅಲ್ಲಿಯ ಸರ್ಕಾರದ ಕ್ರಮವು ದುರದ್ದೇಶಪೂರಿತವಾಗಿದೆ. ಈ ಕ್ರಮದ ವಿರುದ್ಧ ಅಲ್ಲಿಯ ಕನ್ನಡಿಗರು, ಕನ್ನಡ ಸಂಘಟನೆಗಳು ತೀವ್ರ ಆಕ್ರೋಶ, ಪ್ರತಿಭಟನೆ ವ್ಯಕ್ತಪಡಿಸುತ್ತಿದ್ದಾರೆ. ಅವರ ಬೆನ್ನಿಗೆ ಕರ್ನಾಟಕ ಸರ್ಕಾರ ಗಟ್ಟಿಯಾಗಿ ನಿಲ್ಲಬೇಕಾಗಿದೆ ಎಂದಿದ್ದಾರೆ.

ಇದನ್ನೂ ಓದಿ: Job Recruitment: ಬ್ಯಾಂಕ್ ಆಫ್ ಬರೋಡಾದಲ್ಲಿ 627 ಹುದ್ದೆಗಳಿಗೆ ಅರ್ಜಿ ಆಹ್ವಾನ; 55 ಲಕ್ಷದವರೆಗೆ ಸಂಬಳ!

ಮಹಾರಾಷ್ಟ್ರ ಸರ್ಕಾರಕ್ಕೆ ಕರ್ನಾಟಕ ಸರ್ಕಾರವು ತನ್ನ ಸೂಕ್ತ ಹಾಗೂ ಸಮಂಜಸವಾದ ಪ್ರತಿಭಟನೆಯನ್ನು ತಿಳಿಸಬೇಕು. ರಾಜ್ಯ ಸರ್ಕಾರದ ಹಿರಿಯ ಅಧಿಕಾರಿಗಳು, ಕನ್ನಡ ಅಭಿವೃದ್ಧಿ ಪ್ರಾಧಿಕಾರ, ಕರ್ನಾಟಕ ಗಡಿಪ್ರದೇಶಾಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷರು, ಸದಸ್ಯರನ್ನೊಳಗೊಂಡ ನಿಯೋಗವನ್ನು ಮಹಾರಾಷ್ಟ್ರಕ್ಕೆ ಕಳುಹಿಸಿ ಸಮಗ್ರವಾದ ವರದಿಯೊಂದನ್ನು ತಾವು ತರಿಸಿಕೊಂಡು ಮಹಾರಾಷ್ಟ್ರ ಸರ್ಕಾರದ ಗಮನಕ್ಕೆ ತರುವ ಮೂಲಕ ಅಲ್ಲಿಯ ಕನ್ನಡಿಗರ ಹಿತರಕ್ಷಣೆಗೆ ಕ್ರಮ ಕೈಕೊಳ್ಳುವಂತೆ ಒತ್ತಾಯಿಸಬೇಕೆಂದು ಕೋರುತ್ತೇವೆ ಎಂದು ಬೆಳಗಾವಿ ಕನ್ನಡ ಸಂಘಟನೆಗಳ ಕ್ರಿಯಾ ಸಮಿತಿಯ ಅಧ್ಯಕ್ಷ ಅಶೋಕ ಚಂದರಗಿ ಹಾಗೂ ಸದಸ್ಯರು ಪತ್ರ ಬರೆದು ಕರ್ನಾಟಕ ಸರ್ಕಾರಕ್ಕೆ ಮಹಾರಾಷ್ಟ್ರ ಧೋರಣೆಯನ್ನು ಮನವರಿಕೆ ಮಾಡಿದ್ದಾರೆ.

Continue Reading
Advertisement
Actor Chikkanna
ಕರ್ನಾಟಕ32 mins ago

Actor Chikkanna: ದರ್ಶನ್‌ ಊಟಕ್ಕೆ ಕರೆದಿದ್ರು, ಹೋಗಿದ್ದೆ; ಪೊಲೀಸ್‌ ವಿಚಾರಣೆ ಬಳಿಕ ಚಿಕ್ಕಣ್ಣ ಫಸ್ಟ್‌ ರಿಯಾಕ್ಷನ್!

Kalki 2898 AD Movie Bhairava Anthem Released
ಕರ್ನಾಟಕ1 hour ago

Kalki 2898 AD: ʼಕಲ್ಕಿ 2898 ADʼ ಚಿತ್ರದ ಭೈರವ ಆಂಥಮ್‌ ರಿಲೀಸ್‌!

Union Minister HD Kumaraswamy visit Shira
ತುಮಕೂರು1 hour ago

Shira News: ಶಿರಾಕ್ಕೆ ಕೇಂದ್ರ ಸಚಿವ ಎಚ್‌.ಡಿ.ಕುಮಾರಸ್ವಾಮಿ ಭೇಟಿ

Maharashtra government appoints Marathi teachers to Kannada schools; Ashoka Chandragi wrote a letter to CM Siddaramaiah
ಬೆಳಗಾವಿ1 hour ago

Belagavi News: ಕನ್ನಡ ಶಾಲೆಗಳಿಗೆ ಮರಾಠಿ ಶಿಕ್ಷಕರು! ಮುಖ್ಯಮಂತ್ರಿಗಳೇ ಗಮನ ಹರಿಸಿ

District administration failed to prevent illegal activities in the district MLA Janardhana Reddy alleges
ಕರ್ನಾಟಕ1 hour ago

Koppala News: ಜಿಲ್ಲೆಯಲ್ಲಿ ಕಾನೂನುಬಾಹಿರ ಚಟುವಟಿಕೆ ತಡೆಯುವಲ್ಲಿ ಜಿಲ್ಲಾಡಳಿತ ವಿಫಲ; ಶಾಸಕ ಜನಾರ್ದನ ರೆಡ್ಡಿ ಆರೋಪ

Pushpa 2
ಸಿನಿಮಾ1 hour ago

Pushpa 2: ಪುಷ್ಪ 2 ಸಿನಿಮಾ ಬಿಡುಗಡೆ 5 ತಿಂಗಳು ಮುಂದೂಡಿಕೆ; ಇಲ್ಲಿದೆ ಹೊಸ ಡೇಟ್

HD Kumaraswamy
ಕರ್ನಾಟಕ2 hours ago

HD Kumaraswamy: ಕೊಬ್ಬರಿಗೆ 16-18 ಸಾವಿರ ಬೆಂಬಲ ಬೆಲೆ ಕೊಡಿಸುವೆ: ರೈತರಿಗೆ ಎಚ್‌ಡಿಕೆ ಭರವಸೆ

Narendra Modi
ದೇಶ2 hours ago

ಪೋಪ್‌-ಮೋದಿ ಭೇಟಿಯನ್ನು ಲೇವಡಿ ಮಾಡಲು ಹೋದ ಕಾಂಗ್ರೆಸ್‌ಗೆ ಮುಖಭಂಗ; ಕ್ರೈಸ್ತರ ಕ್ಷಮೆ ಕೇಳಿದ್ದೇಕೆ?

Health Tips Kannada
Latest2 hours ago

Health Tips Kannada: ನೆನಪಿಡಿ, ನಾಲಿಗೆ ಬಯಸುವ ಆಹಾರಗಳನ್ನೆಲ್ಲ ನಿಮ್ಮ ಮಿದುಳು ಬಯಸದು!

Petrol Diesel Price Hike
ಕರ್ನಾಟಕ2 hours ago

Petrol Diesel Price Hike: ಕೇಂದ್ರ ಸರ್ಕಾರ ಹಣ ಕೊಟ್ಟಿದ್ರೆ ತೆರಿಗೆ ಹೆಚ್ಚಿಸುವ ಅಗತ್ಯವೇ ಇರ್ತಿರಲಿಲ್ಲ: ಸಿಎಂ ಸಿದ್ದರಾಮಯ್ಯ

Sharmitha Gowda in bikini
ಕಿರುತೆರೆ9 months ago

Geetha Serial Kannada: ನಿದ್ದೆ ಕದ್ದ ಚೋರಿ! ನಟಿ `ಭಾನುಮತಿ’ ಹಾಟ್‌ ಪೋಟೊಗಳಿಗೆ ಫ್ಯಾನ್ಸ್ ಫುಲ್ ಫಿದಾ

Kannada Serials
ಕಿರುತೆರೆ8 months ago

Kannada Serials TRP: 2ನೇ ಸ್ಥಾನದಲ್ಲಿ 2 ಧಾರಾವಾಹಿಗಳು; ಟಿಆರ್‌ಪಿ ರೇಸ್‌ನಲ್ಲಿಲ್ಲ ಭಾಗ್ಯಲಕ್ಷ್ಮೀ!

Bigg Boss- Saregamapa 20 average TRP
ಕಿರುತೆರೆ8 months ago

Kannada Serials TRP: ಏಳನೇ ಸ್ಥಾನಕ್ಕೆ ʻಅಮೃತಧಾರೆʼ ಕುಸಿತ; ಬಿಗ್‌ ಬಾಸ್‌-ಸರಿಗಮಪ ಟಿಆರ್‌ಪಿ ಎಷ್ಟು?

galipata neetu
ಕಿರುತೆರೆ7 months ago

Kanyadana Serial: ಕಿರುತೆರೆಗೆ ಮತ್ತೆ ಎಂಟ್ರಿ ಕೊಟ್ಟ ʻಗಾಳಿಪಟʼ ಖ್ಯಾತಿಯ ʻನೀತುʼ!

Kannada Serials
ಕಿರುತೆರೆ9 months ago

Kannada Serials TRP: ನಾಲ್ಕನೇ ಸ್ಥಾನಕ್ಕೆ ಕುಸಿತ ಕಂಡ ʻಸೀತಾ ರಾಮʼ; ಟಿಆರ್‌ಪಿ ರೇಸ್‌ಗೆ ʻಭಾಗ್ಯಲಕ್ಷ್ಮಿʼ ಬ್ಯಾಕ್‌!

Kannada Serials
ಕಿರುತೆರೆ8 months ago

Kannada Serials TRP: ಟಿಆರ್‌ಪಿಯಲ್ಲಿ ʻಭಾಗ್ಯಲಕ್ಷ್ಮೀʼ ಹವಾ; ʻಪುಟ್ಟಕ್ಕನ ಮಕ್ಕಳುʼ ಧಾರಾವಾಹಿಗೆ ಸಂಕಷ್ಟ!

Bigg Boss' dominates TRP; Sita Rama fell to the sixth position
ಕಿರುತೆರೆ8 months ago

Kannada Serials TRP: ಟಿಆರ್‌ಪಿಯಲ್ಲಿ ʻಬಿಗ್ ಬಾಸ್ʼದೇ ಮೇಲುಗೈ; 6ನೇ ಸ್ಥಾನಕ್ಕೆ ಕುಸಿದ ʻಸೀತಾ ರಾಮʼ

geetha serial Dhanush gowda engagement
ಕಿರುತೆರೆ6 months ago

Dhanush Gowda: ಗೀತಾ ಧಾರಾವಾಹಿ ನಟನ ನಿಶ್ಚಿತಾರ್ಥ; ಭವ್ಯಾಳ ಕಮೆಂಟ್‌ ಬಾಕ್ಸ್‌ ಆಫ್‌!

varun
ಕಿರುತೆರೆ7 months ago

Brindavana Serial: ʼಬೃಂದಾವನʼ ಧಾರಾವಾಹಿಯಲ್ಲಿ ದೊಡ್ಡ ಟ್ವಿಸ್ಟ್‌; ಪ್ರಮುಖ ಪಾತ್ರಧಾರಿಯೇ ಬದಲು

Kannada Serials
ಕಿರುತೆರೆ9 months ago

Kannada Serials TRP: ಟಿಆರ್‌ಪಿಯಲ್ಲಿ ಏರಿಕೆ ಕಂಡ ʻಅಮೃತಧಾರೆʼ; ʻಗಟ್ಟಿಮೇಳʼಕ್ಕೆ ನಾಲ್ಕನೇ ಸ್ಥಾನ!

Actor Darshan
ಮೈಸೂರು9 hours ago

Actor Darshan : ಕೊಲೆ ಕೇಸ್‌ ಬೆನ್ನಲ್ಲೇ ನಟ ದರ್ಶನ್‌ ಸೇರಿ ಪತ್ನಿ ವಿಜಯಲಕ್ಷ್ಮಿಗೆ ಬಾರ್ ಹೆಡೆಡ್ ಗೂಸ್ ಸಂಕಷ್ಟ!

Bakrid 2024
ಬೆಂಗಳೂರು10 hours ago

Bakrid 2024 : ಮತ್ತೊಂದು ಧರ್ಮವನ್ನೂ ಪ್ರೀತಿಸಿ; ಬಕ್ರೀದ್‌ ಪ್ರಾರ್ಥನೆಯಲ್ಲಿ ಸಿಎಂ ಸಿದ್ದರಾಮಯ್ಯ ಕರೆ

Renukaswamy murder case The location of the accused is complete
ಸಿನಿಮಾ1 day ago

Renuka Swamy murder : ಭೀಕರವಾಗಿ ಕೊಂದರೂ ಆರೋಪಿಗಳಿಗೆ ಕಾಡುತ್ತಿಲ್ವಾ ಪಾಪಪ್ರಜ್ಞೆ? ನಗುತ್ತಲೇ ಹೊರಬಂದ ಪವಿತ್ರಾ ಗೌಡ, ಪವನ್‌

Renuka swamy murder
ಚಿತ್ರದುರ್ಗ1 day ago

Renuka swamy Murder : ರೇಣುಕಾಸ್ವಾಮಿ ಕುಟುಂಬಸ್ಥರಿಗೆ ಸಾಂತ್ವನ ಹೇಳಿದ ಬಾಳೆಹೊನ್ನೂರು ಶ್ರೀಗಳು

Vijayanagara News
ವಿಜಯನಗರ1 day ago

Vijayanagara News : ಕೆಲಸಕ್ಕೆ ಚಕ್ಕರ್, ಸಂಬಳಕ್ಕೆ ಹಾಜರ್! ಹಾರಕನಾಳು ಗ್ರಾಪಂ ಪಿಡಿಓಗಾಗಿ ಗ್ರಾಮಸ್ಥರ ಹುಡುಕಾಟ

Actor Darshan
ಯಾದಗಿರಿ2 days ago

Actor Darshan : ಬಾಸ್‌ ಅಂತ ಯಾಕ್‌ ಬಕೆಟ್‌ ಹಿಡಿಯುತ್ತೀರಾ ಅಂದವನಿಗೆ ದರ್ಶನ್ ಅಭಿಮಾನಿಯಿಂದ ಜೀವ ಬೆದರಿಕೆ!

Karnataka Weather Forecast
ಮಳೆ3 days ago

Karnataka Weather : ಕರಾವಳಿ, ಉತ್ತರ ಒಳನಾಡಿನಲ್ಲಿ ವರುಣಾರ್ಭಟ; ನಾಳೆಯು ಹಲವೆಡೆ ಸಿಕ್ಕಾಪಟ್ಟೆ ಮಳೆ

Actor Darshan
ಬೆಂಗಳೂರು3 days ago

Actor Darshan : ರೇಣುಕಾಸ್ವಾಮಿಯನ್ನು ಕಿಡ್ನ್ಯಾಪ್ ಮಾಡಿ ಕರೆತರುವ ದೃಶ್ಯ ಸಿಸಿ ಕ್ಯಾಮೆರಾದಲ್ಲಿ ಸೆರೆ!

actor Darshan
ಬೆಂಗಳೂರು3 days ago

Actor Darshan : ರೇಣುಕಾಸ್ವಾಮಿ ಕೊಲೆ ಕೇಸ್‌ನಲ್ಲಿ ಮತ್ತಿಬ್ಬರು ಸರೆಂಡರ್‌; ಆರೋಪಿಗಳ ಸಂಖ್ಯೆ 16ಕ್ಕೆ ಏರಿಕೆ

Actor Darshan
ಸಿನಿಮಾ3 days ago

Actor Darshan : ರೇಣುಕಾಸ್ವಾಮಿ ‌ಮೃತದೇಹ ಬಿಸಾಡಿ ಬಳಿಕ ಸಾಕ್ಷ್ಯಇದ್ದ 2 ಮೊಬೈಲ್‌ಗಳನ್ನು ಮೋರಿಗೆ ಎಸೆದ್ರಾ ಆರೋಪಿಗಳು?

ಟ್ರೆಂಡಿಂಗ್‌