Gadar 2 Box Office: ʼಜೈಲರ್‌ʼ ಗಳಿಕೆಯನ್ನು ಹಿಂದಿಕ್ಕಿದ ಗದರ್‌ 2; ಸ್ವಾತಂತ್ರ್ಯ ದಿನ ಅತಿ ಹೆಚ್ಚು ಕಲೆಕ್ಷನ್‌! - Vistara News

ಬಾಲಿವುಡ್

Gadar 2 Box Office: ʼಜೈಲರ್‌ʼ ಗಳಿಕೆಯನ್ನು ಹಿಂದಿಕ್ಕಿದ ಗದರ್‌ 2; ಸ್ವಾತಂತ್ರ್ಯ ದಿನ ಅತಿ ಹೆಚ್ಚು ಕಲೆಕ್ಷನ್‌!

Gadar 2 Box Office: ಅನಿಲ್ ಶರ್ಮಾ ನಿರ್ದೇಶನದ ಈ ಸಿನಿಮಾ ಆಗಸ್ಟ್ 11ರಂದು ಅಕ್ಷಯ್ ಕುಮಾರ್ ಅಭಿನಯದ ಓ ಮೈ ಗಾಡ್ (OMG2)‌ ಸಿನಿಮಾ ಜತೆಗೆ ಪೈಪೋಟಿಗೆ ಇಳಿದಿತ್ತು. ಐದು ದಿನಗಳಲ್ಲಿ ಈ ಚಿತ್ರ ಬರೋಬ್ಬರಿ 229 ಕೋಟಿ ರೂ. ಗಳಿಕೆ ಮಾಡಿದೆ. ಈ ಮೂಲಕ ‘ಗದರ್ 2’ ಹೊಸ ದಾಖಲೆ ಸೃಷ್ಟಿ ಮಾಡಿದೆ.

VISTARANEWS.COM


on

Gadar 2 Box Office 5
ಮಹತ್ವದ, ಕುತೂಹಲಕರ ಸುದ್ದಿಗಾಗಿ ಫಾಲೊ ಮಾಡಿ
Koo

ಬೆಂಗಳೂರು: ಸನ್ನಿ ಡಿಯೋಲ್ ಮತ್ತು ಅಮೀಶಾ ಪಟೇಲ್ ನಟಿಸಿರುವ ಗದರ್ 2 (Gadar 2 Box Office), ಆಗಸ್ಟ್ 15ರಂದು 55.40 ಕೋಟಿ ರೂ. ಗಳಿಕೆ ಕಂಡಿದೆ. ಸ್ವಾತಂತ್ರ್ಯ ದಿನ ಅತಿ ಹೆಚ್ಚು ಗಳಿಕೆ ಕಂಡ ಸಿನಿಮಾವಾಗಿ ಹೊರಹೊಮ್ಮಿದೆ. ಅನಿಲ್ ಶರ್ಮಾ ನಿರ್ದೇಶನದ ಈ ಸಿನಿಮಾ ಆಗಸ್ಟ್ 11ರಂದು ಅಕ್ಷಯ್ ಕುಮಾರ್ ಅಭಿನಯದ ಓ ಮೈ ಗಾಡ್ (OMG2)‌ ಸಿನಿಮಾ ಜತೆಗೆ ಪೈಪೋಟಿಗೆ ಇಳಿದಿತ್ತು. ಐದು ದಿನಗಳಲ್ಲಿ ಈ ಚಿತ್ರ ಬರೋಬ್ಬರಿ 229 ಕೋಟಿ ರೂ. ಗಳಿಕೆ ಮಾಡಿದೆ. ಈ ಮೂಲಕ ‘ಗದರ್ 2’ ಹೊಸ ದಾಖಲೆ ಸೃಷ್ಟಿ ಮಾಡಿದೆ.

ಹಿಂದಿ ಚಿತ್ರರಂಗದ ಇತಿಹಾಸದಲ್ಲಿ ಈ ಚಿತ್ರ ಆಗಸ್ಟ್‌ 15ರಂದು ಅತ್ಯುತ್ತಮ ಕಲೆಕ್ಷನ್‌ ಮಾಡಿದೆ ಎಂದು ವರದಿಯಾಗಿದೆ. ಗದರ್ 2 ಭಾರತದಲ್ಲಿ ಬಿಡುಗಡೆಯಾದ ನಾಲ್ಕನೇ ದಿನದಲ್ಲಿ 39 ಕೋಟಿ ರೂ. ನಿವ್ವಳ ಸಂಗ್ರಹ ಮಾಡಿದೆ. ಕುತೂಹಲಕಾರಿ ಸಂಗತಿ ಏನೆಂದರೆ, ಗದರ್ 2 ರಜನೀಕಾಂತ್ ಅಭಿನಯದ ಜೈಲರ್ ಸಿನಿಮಾದ ಕಲೆಕ್ಷನ್‌ನನ್ನು ಹಿಂದೆ ತಳ್ಳಿದೆ.

ಎರಡನೇ ವೀಕೆಂಡ್​ ವೇಳೆಗೆ ಸಿನಿಮಾದ ಗಳಿಕೆ 300 ಕೋಟಿ ರೂಪಾಯಿ ದಾಟಲಿದೆ. ಶುಕ್ರವಾರ (ಆಗಸ್ಟ್‌ 11) ಈ ಸಿನಿಮಾ 40.10 ಕೋಟಿ ಬಾಚಿಕೊಂಡಿತು. ಶನಿವಾರ (ಆಗಸ್ಟ್‌ 12) 43.08 ಕೋಟಿ ರೂಪಾಯಿ, ಭಾನುವಾರ(ಆಗಸ್ಟ್‌ 13) 51.70 ಕೋಟಿ ರೂಪಾಯಿ, ಸೋಮವಾರ (ಆಗಸ್ಟ್‌ 14) 38.70 ಕೋಟಿ ರೂಪಾಯಿ ಗಳಿಸಿತು. ಆಗಸ್ಟ್ 15ರ ಪ್ರಯುಕ್ತ ಮಂಗಳವಾರ (ಆಗಸ್ಟ್‌ 15) ಈ ಚಿತ್ರ 55.40 ಕೋಟಿ ರೂಪಾಯಿ ಗಳಿಸಿದೆ. ಈ ಮೂಲಕ ಚಿತ್ರದ ಕಲೆಕ್ಷನ್ 229 ಕೋಟಿ ರೂಪಾಯಿ ಆಗಿದೆ.

ಇದನ್ನೂ ಓದಿ: Gadar 2 Movie: ಜೈಲರ್‌ ಅಬ್ಬರದ ಮಧ್ಯೆಯೂ ಖದರ್‌ ತೋರಿಸಿದ ಗದರ್‌ 2, ಮೊದಲ ದಿನ ಭಾರಿ ಕಲೆಕ್ಷನ್

ಮೆಟ್ರೋ ನಗರಗಳಲ್ಲಿ ಬಹುತೇಕ ಎಲ್ಲಾ ಚಿತ್ರಮಂದಿರಗಳು ಹೌಸ್‌ಫುಲ್ ಆಗಿವೆ. ಈ ಗದರ್‌ 2 ಸಿನಿಮಾ 2001ರಲ್ಲಿ ಬಿಡುಗಡೆಯಾದ ಗದರ್‌: ಏಕ್‌ ಪ್ರೇಮ್‌ ಕಥಾ ಸಿನಿಮಾದ ಸೀಕ್ವೆಲ್‌ ಆಗಿದೆ. 2001ರಲ್ಲಿ ಬಿಡುಗಡೆಯಾದಾಗ ಗಲ್ಲಾ ಪೆಟ್ಟಿಗೆಯಲ್ಲಿ ಭಾರೀ ಹಣ ಬಾಚಿಕೊಳ್ಳುವುದರೊಂದಿಗೆ ಸಿನಿಮಾ ದಾಖಲೆ ಬರೆದಿತ್ತು. ಇದೀಗ ಅದೇ ರೀತಿಯಲ್ಲಿ ಅದರ ಎರಡನೇ ಭಾಗ ಕೂಡ ಜನರ ಮನಸ್ಸನ್ನು ಕದಿಯುವಲ್ಲಿ ಯಶಸ್ವಿಯಾಗಿದೆ.

ಇದನ್ನೂ ಓದಿ: Jailer Movie: ಗದರ್‌ 2, OMG 2ಗೆ ʻಜೈಲರ್‌ʼ ಪೈಪೋಟಿ; ಕೆಜಿಎಫ್ 2 ದಾಖಲೆ ಉಡೀಸ್‌, ಫಸ್ಟ್‌ ಡೇ ಕಲೆಕ್ಷನ್‌ ಎಷ್ಟಾಗಬಹುದು?

ಗದರ್‌ 2 ಸಿನಿಮಾದಲ್ಲಿ ಸನ್ನಿ ಡಿಯೋಲ್‌, ಅಮಿಷಾ ಪಟೇಲ್‌ ಮತ್ತು ಉತ್ಕರ್ಷ್‌ ಶರ್ಮಾ ಅವರು ನಟಿಸಿದ್ದಾರೆ. 1971ರಲ್ಲಿ ಭಾರತ ಪಾಕಿಸ್ತಾನ ನಡುವೆ ಯುದ್ಧ ನಡೆದ ಸಂದರ್ಭದಲ್ಲಿನ ಕಥೆ ಇದಾಗಿದೆ. ಇದರಲ್ಲಿ ಸನ್ನಿ ಅವರು ತಾರಾ ಸಿಂಗ್‌ ಪಾತ್ರದಲ್ಲಿ ನಟಿಸಿದ್ದರೆ, ಆಮಿಷಾ ಅವರು ತಾರಾ ಪತ್ನಿ ಸಕೀನಾ ಪಾತ್ರದಲ್ಲಿ ಹಾಗೆಯೇ ಉತ್ಕರ್ಷ್‌ ಅವರು ಅವರ ಪುತ್ರ ಚರಣ್‌ ಜೀತ್‌ ಸಿಂಗ್‌ ಪಾತ್ರದಲ್ಲಿ ನಟಿಸಿದ್ದಾರೆ. ತರಣ್‌ ಜೀತ್‌ ಸಿಂಗ್‌ ಪಾಕಿಸ್ತಾನದಲ್ಲಿ ಪಾಕ್‌ ಸೇನೆಯ ಕೈಗೆ ಸಿಲುಕಿಕೊಂಡಿದ್ದು, ಆತನನ್ನು ರಕ್ಷಿಸಲೆಂದು ತಾರಾ ಸಿಂಗ್‌ ಪಾಕಿಸ್ತಾನಕ್ಕೆ ತೆರಳುವ ಕಥೆ ಇದರಲ್ಲಿದೆ. ಈ ಸಿನಿಮಾದವನ್ನು ಅನಿಲ್‌ ಶರ್ಮಾ ಅವರು ನಿರ್ದೇಶನ ಮಾಡಿದ್ದಾರೆ.

ಕ್ಷಣ ಕ್ಷಣದ ಮಾಹಿತಿಗಾಗಿ Vistara News FaceBook ಪೇಜ್ ಫಾಲೋ ಮಾಡಿ
ಮಹತ್ವದ ಮಾಹಿತಿಗಾಗಿ ವಿಸ್ತಾರ ನ್ಯೂಸ್ ಆ್ಯಪ್ ಉಚಿತವಾಗಿ ಡೌನ್ ಲೋಡ್ ಮಾಡಿಕೊಳ್ಳಿ: Andriod App | IOS App
Continue Reading
Click to comment

Leave a Reply

Your email address will not be published. Required fields are marked *

ಬಾಲಿವುಡ್

Aamir Khan: 200 ಕ್ಕೂ ಹೆಚ್ಚು ಅತಿಥಿಗಳೊಂದಿಗೆ ತಾಯಿಯ ಜನುಮದಿನ ಸೆಲೆಬ್ರೆಟ್‌ ಮಾಡಲಿದ್ದಾರೆ ಆಮೀರ್‌!

Aamir Khan : ಆಮೀರ್ ಕಳೆದ ವರ್ಷ ತಾಯಿ ಜೀನತ್‌ ಚಿಕಿತ್ಸೆ ಪಡೆಯುತ್ತಿದ್ದರಿಂದ ಚೆನ್ನೈಗೆ ತೆರಳಿದ್ದರು ಎಂದು ವರದಿಯಾಗಿದೆ. ಜೀನತ್ ಚಿಕಿತ್ಸೆ ಪಡೆಯುತ್ತಿದ್ದ ವೈದ್ಯಕೀಯ ಕೇಂದ್ರದ ಸಮೀಪವಿರುವ ಹೋಟೆಲ್‌ನಲ್ಲಿ ಆಮೀರ್ ತಂಗಿದ್ದರು. ಇನ್ನು 2023ರಲ್ಲಿ ಜೀನತ್ ಅವರ 89ನೇ ಹುಟ್ಟುಹಬ್ಬವನ್ನು ಆಚರಿಸಲು ಆಮೀರ್ ಮತ್ತು ಅವರ ಕುಟುಂಬ ಸದಸ್ಯರು ಒಟ್ಟಾಗಿ ಪಾರ್ಟಿ ಮಾಡಿದ್ದರು. ಮುಂಬೈನ ಮನೆಯಲ್ಲಿ ನಡೆದ ಸಂಭ್ರಮಾಚರಣೆಯಲ್ಲಿ ಪಂಜಾಬಿ ಗಾಯಕಿ ಪ್ರತಿಭಾ ಸಿಂಗ್ ಬಾಘೆಲ್ ಅವರು ಈ ಹಿಂದೆ ಪಾರ್ಟಿಯ ಫೋಟೊಗಳನ್ನು ಇನ್‌ಸ್ಟಾದಲ್ಲಿ ಹಂಚಿಕೊಂಡಿದ್ದರು.

VISTARANEWS.COM


on

Aamir Khan to fly in over 200 relatives and friends for mom Zeenat's grand 90th birthday
Koo

ಬೆಂಗಳೂರು: ನಟ ಆಮೀರ್ ಖಾನ್ (Aamir Khan) ತಾಯಿ ಜೀನತ್ ಹುಸೇನ್ ಅವರ 90ನೇ ಹುಟ್ಟುಹಬ್ಬವನ್ನು 200 ಕ್ಕೂ ಹೆಚ್ಚು ಅತಿಥಿಗಳೊಂದಿಗೆ ಆಚರಿಸಲು ಸಿದ್ಧವಾಗಿದ್ದಾರೆ ಎಂದು ವರದಿಯಾಗಿದೆ. ಆಚರಣೆಯಲ್ಲಿ ಬನಾರಸ್, ಬೆಂಗಳೂರು, ಲಕ್ನೋ, ಮೈಸೂರು ಮತ್ತು ಇತರ ನಗರಗಳಿಂದ ಸಂಬಂಧಿಕರು (Zeenat’s grand 90th birthday ) ಸೇರಲಿದ್ದಾರೆ ಎಂದು ವರದಿಯಾಗಿದೆ. ಕಳೆದ ಒಂದು ವರ್ಷದಿಂದ ಆಮೀರ್‌ ತಾಯಿ ಅಸ್ವಸ್ಥಳಾಗಿದ್ದರು. ಈಗ ಜೀನತ್‌ ಅವರು ಚೇತರಿಸಿಕೊಂಡಿದ್ದ ಕಾರಣ ಆಮೀರ್‌ ಅದ್ಧೂರಿಯಾಗಿ ಸೆಲೆಬ್ರೆಟ್‌ ಮಾಡಬೇಕೆಂದಿದ್ದಾರೆ ಎನ್ನಲಾಗಿದೆ.

“ಜೂನ್ 13 ರಂದು ಆಮೀರ್ ಖಾನ್ ಅಮ್ಮನ ಜನುಮದಿನದ ಅಂಗವಾಗಿ ವಿವಿಧ ನಗರಗಳಿಂದ 200ಕ್ಕೂ ಹೆಚ್ಚು ಕುಟುಂಬ ಸದಸ್ಯರು ಮತ್ತು ಸ್ನೇಹಿತರನ್ನು ಆಹ್ವಾನಿಸಿದ್ದಾರೆ. ಒಂದು ವರ್ಷದಿಂದ ಆಮೀರ್‌ ತಾಯಿ ಅಸ್ವಸ್ಥಳಾಗಿದ್ದರು. ಈಗ ಅವರು ಚೇತರಿಸಿಕೊಂಡು ಆರೋಗ್ಯವಾಗಿದ್ದಾರೆ. ಹೀಗಾಗಿ ಆಮೀರ್‌ ಗೆಟ್-ಟುಗೆದರ್ ಮಾಡಲು ಬಯಸಿದ್ದರು. ಈ ವಿಶೇಷ ದಿನವನ್ನು ಆಚರಿಸಲು ಬನಾರಸ್, ಬೆಂಗಳೂರು, ಲಕ್ನೋ, ಮೈಸೂರು ಮತ್ತು ಇತರ ನಗರಗಳಿಂದ ಜನರು ಬರುತ್ತಿದ್ದಾರೆʼʼ ಎಂದು ವರದಿಯಾಗಿದೆ.

ಆಮೀರ್ ಕಳೆದ ವರ್ಷ ತಾಯಿ ಜೀನತ್‌ ಚಿಕಿತ್ಸೆ ಪಡೆಯುತ್ತಿದ್ದರಿಂದ ಚೆನ್ನೈಗೆ ತೆರಳಿದ್ದರು ಎಂದು ವರದಿಯಾಗಿದೆ. ಜೀನತ್ ಚಿಕಿತ್ಸೆ ಪಡೆಯುತ್ತಿದ್ದ ವೈದ್ಯಕೀಯ ಕೇಂದ್ರದ ಸಮೀಪವಿರುವ ಹೋಟೆಲ್‌ನಲ್ಲಿ ಆಮೀರ್ ತಂಗಿದ್ದರು. ಇನ್ನು 2023ರಲ್ಲಿ ಜೀನತ್ ಅವರ 89ನೇ ಹುಟ್ಟುಹಬ್ಬವನ್ನು ಆಚರಿಸಲು ಆಮೀರ್ ಮತ್ತು ಅವರ ಕುಟುಂಬ ಸದಸ್ಯರು ಒಟ್ಟಾಗಿ ಪಾರ್ಟಿ ಮಾಡಿದ್ದರು. ಮುಂಬೈನ ಮನೆಯಲ್ಲಿ ನಡೆದ ಸಂಭ್ರಮಾಚರಣೆಯಲ್ಲಿ ಪಂಜಾಬಿ ಗಾಯಕಿ ಪ್ರತಿಭಾ ಸಿಂಗ್ ಬಾಘೆಲ್ ಅವರು ಈ ಹಿಂದೆ ಪಾರ್ಟಿಯ ಫೋಟೊಗಳನ್ನು ಇನ್‌ಸ್ಟಾದಲ್ಲಿ ಹಂಚಿಕೊಂಡಿದ್ದರು.

ಇದನ್ನೂ ಓದಿ: Aamir Khan: ವಡೋದರಾದಲ್ಲಿ ‘ಸಿತಾರೆ ಜಮೀನ್ ಪರ್’ ಚಿತ್ರದ ಶೂಟಿಂಗ್‌ನಲ್ಲಿ ಬ್ಯುಸಿಯಾದ ಆಮೀರ್‌ ಖಾನ್‌!

`ಲಾಲ್ ಸಿಂಗ್ ಚಡ್ಡಾ’ ಸಿನಿಮಾ ಸೋತ ಬಳಿಕ ಆಮೀರ್‌ ಖಾನ್‌ (Aamir Khan) ಮುಂದಿನ ಪ್ರಾಜೆಕ್ಟ್‌ ಘೋಷಿಸಿದ್ದರು. ಅದುವೇ ‘ಸಿತಾರೆ ಜಮೀನ್ ಪರ್’. 2007ರಲ್ಲಿ ದರ್ಶೀಲ್ ಸಫಾರಿ ಮತ್ತು ಆಮೀರ್ ಖಾನ್ (Aamir Khan) ನಟನೆಯ ‘ತಾರೆ ಜಮೀನ್ ಪರ್’ (Taare Zameen Par) ಬ್ಲಾಕ್‌ಬಸ್ಟರ್‌ ಹಿಟ್‌ ಆಯಿತು. ಆಮೀರ್ ನಿರ್ದೇಶನದ ಚೊಚ್ಚಲ ಸಿನಿಮಾ ಇದಾಗಿದ್ದು, ಡಿಸ್ಲೆಕ್ಸಿಯಾದಿಂದ ಬಳಲುತ್ತಿರುವ ಚಿಕ್ಕ ಹುಡುಗನ ಕುರಿತಾಗಿ ಈ ಸಿನಿಮಾ ಇತ್ತು. ಅಮೋಲ್ ಗುಪ್ತೆ ಬರೆದ ಈ ಚಿತ್ರ ರಾಷ್ಟ್ರೀಯ ಪ್ರಶಸ್ತಿಯನ್ನು ಪಡೆಯಿತು. ಇದೀಗ ಆಮೀರ್ ಖಾನ್ ದೆಹಲಿಯಲ್ಲಿ ಚಿತ್ರೀಕರಣದ ನಂತರ, ಗುಜರಾತ್‌ನ ವಡೋದರದಲ್ಲಿ ಸಿನಿಮಾ ಚಿತ್ರೀಕರಣ ನಡೆಸುತ್ತಿದ್ದಾರೆ ಎಂದು ಹೇಳಲಾಗುತ್ತಿದೆ.

ಸಿತಾರೆ ಜಮೀನ್ ಪರ್ ಚಿತ್ರದ ಬ್ಯಾಕ್-ಟು-ಬ್ಯಾಕ್ ಚಿತ್ರೀಕರಣದಲ್ಲಿ ಆಮೀರ್ ಖಾನ್ ನಿರತರಾಗಿದ್ದಾರೆ. ದೆಹಲಿಯಲ್ಲಿ ಚಿತ್ರೀಕರಣ ಮುಗಿಸಿದ ನಂತರ, ಅವರು ಈಗ ಬರೋಡದಲ್ಲಿ ಚಿತ್ರೀಕರಣ ಮಾಡುತ್ತಿದ್ದಾರೆ. ಸೂಪರ್‌ಸ್ಟಾರ್ ಬಿಸಿಲಿನಲ್ಲಿ ಚಿತ್ರೀಕರಣ ಮಾಡುತ್ತಿದ್ದಾರೆ.” ಸಿತಾರೆ ಜಮೀನ್ ಪರ್ ಚಿತ್ರವನ್ನು ಆರ್ ಎಸ್ ಪ್ರಸನ್ನ ಅವರು ನಿರ್ದೇಶಿಸಲಿದ್ದಾರೆ. ಚಿತ್ರದಲ್ಲಿ ಜೆನಿಲಿಯಾ ಡಿಸೋಜಾ ಮತ್ತು ದರ್ಶೀಲ್ ಸಫಾರಿ ಕೂಡ ನಟಿಸಿದ್ದಾರೆ.

Continue Reading

ಸಿನಿಮಾ

Shatrughan Sinha: ಮುಸ್ಲಿಂ ಯುವಕನ ಜತೆ ಮಗಳ ವಿವಾಹ; ನಟ ಶತ್ರುಘ್ನ ಸಿನ್ಹಾ ಪ್ರತಿಕ್ರಿಯೆ ಏನು?

Shatrughan Sinha: ʼದಬಾಂಗ್‌ʼ ಮೂಲಕ ಬಾಲಿವುಡ್‌ಗೆ ಪ್ರವೇಶಿಸಿದ ಸೋನಾಕ್ಷಿ ಸಿನ್ಹಾ ಸದ್ಯ ಹಸೆಮಣೆಗೇರುವ ಸಿದ್ಧತೆಯಲ್ಲಿದ್ದಾರೆ. ತಮ್ಮ ಬಾಯ್‌ಫ್ರೆಂಡ್‌, ನಟ ಜಹೀರ್ ಇಕ್ಬಾಲ್ ಜತೆ ಜೂನ್ 23ರಂದು ದಕ್ಷಿಣ ಮುಂಬೈನಲ್ಲಿ ಮದುವೆಯಾಗಲಿದ್ದಾರೆ ಎಂದು ವರದಿಯಾಗಿದೆ. ಈ ಮಧ್ಯೆ ಮಗಳ ಮದುವೆ ಬಗ್ಗೆ ಮಾತನಾಡಿರುವ ನಟ, ರಾಜಕಾರಣಿ ಶತ್ರುಘ್ನ ಸಿನ್ಹಾ, ತಮಗೆ ಈ ಬಗ್ಗೆ ಮಾಹಿತಿ ಇಲ್ಲ ಎಂದು ತಿಳಿಸಿದ್ದಾರೆ. ಒಂದು ವೇಳೆ ಆಮಂತ್ರಿಸಿದರೆ ಖಂಡಿತವಾಗಿಯೂ ತೆರಳುವುದಾಗಿ ಹೇಳಿದ್ದಾರೆ.

VISTARANEWS.COM


on

Shatrughan Sinha
Koo

ಮುಂಬೈ: ಬಾಲಿವುಡ್‌ ನಟಿ ಸೋನಾಕ್ಷಿ ಸಿನ್ಹಾ (Sonakshi Sinha) ತಮ್ಮ ಬಾಯ್‌ಫ್ರೆಂಡ್‌, ನಟ ಜಹೀರ್ ಇಕ್ಬಾಲ್ (Zaheer Iqbal) ಜತೆ ಜೂನ್ 23ರಂದು ದಕ್ಷಿಣ ಮುಂಬೈನಲ್ಲಿ ಮದುವೆಯಾಗಲಿದ್ದಾರೆ ಎಂದು ವರದಿಯಾಗಿದೆ. ಆದರೆ ಜೋಡಿ ಎಲ್ಲಿಯೂ ತಮ್ಮ ಮದುವೆ ಬಗ್ಗೆ ಅಧಿಕೃತ ಮಾಹಿತಿ ಹಂಚಿಕೊಂಡಿಲ್ಲ. ಈ ಮಧ್ಯೆ ಮಗಳ ಮದುವೆ ಬಗ್ಗೆ ಮಾತನಾಡಿರುವ ನಟ, ರಾಜಕಾರಣಿ ಶತ್ರುಘ್ನ ಸಿನ್ಹಾ (Shatrughan Sinha) ಅವರು, ʼʼಮದುವೆ ಬಗ್ಗೆ ಸೋನಾಕ್ಷಿ ತಮ್ಮ ಬಳಿ ಏನನ್ನೂ ಹೇಳಿಕೊಂಡಿಲ್ಲ. ಇಂದಿನ ಕಾಲದ ಮಕ್ಕಳು ಮದುವೆಗೆ ಒಪ್ಪಿಗೆ ಕೇಳುವುದಿಲ್ಲ. ಬದಲಿಗೆ ತಮ್ಮ ನಿರ್ಧಾರದ ಬಗ್ಗೆ ಕುಟುಂಬದವರಿಗೆ ಮಾಹಿತಿ ನೀಡುತ್ತಾರೆ. ಒಂದು ವೇಳೆ ಅವಳು ಆಮಂತ್ರಿಸಿದರೆ ಖಂಡಿತವಾಗಿಯೂ ತೆರಳಿ ಆಶೀರ್ವದಿಸುತ್ತೇನೆʼʼ ಎಂದು ತಿಳಿಸಿದ್ದಾರೆ.

ಈ ಬಗ್ಗೆ ಮಾಧ್ಯಮದೊಂದಿಗೆ ಮಾತನಾಡಿದ ಅವರು, ʼʼನಾನೀಗ ದೆಹಲಿಯಲ್ಲಿದ್ದೇನೆ. ಚುನಾವಣಾ ಫಲಿತಾಂಶದ ನಂತರ ನಾನು ಇಲ್ಲಿಗೆ ಬಂದೆ. ನನ್ನ ಮಗಳ ಬಗ್ಗೆ, ಅವಳ ಯೋಜನೆಗಳ ಬಗ್ಗೆ ನಾನು ಯಾರೊಂದಿಗೂ ಮಾತನಾಡಿಲ್ಲ. ಅವಳು ಮದುವೆ ಬಗ್ಗೆ ನನಗೆ ಏನನ್ನೂ ಹೇಳಿಲ್ಲ. ಮಾಧ್ಯಮದಲ್ಲಿ ಏನು ವರದಿ ಆಗಿದೆಯೋ ನನಗೂ ಅಷ್ಟೇ ತಿಳಿದಿದೆ. ಅವಳು ನಮಗೆ ಆಮಂತ್ರಣ ನೀಡಿದರೆ ನಾನು ಮತ್ತು ನನ್ನ ಪತ್ನಿ ಇಬ್ಬರೂ ಹೋಗಿ ಆಶೀರ್ವಾದ ಮಾಡುತ್ತೇವೆ. ಅವಳ ಸಂತೋಷವನ್ನು ಎಂದಿಗೂ ನಾವು ಬಯಸುತ್ತೇವೆʼʼ ಎಂದು ಪ್ರತಿಕ್ರಿಯಿಸಿದ್ದಾರೆ.

ಸೋನಾಕ್ಷಿ ಸರಿಯಾದ ನಿರ್ಧಾರ ತೆಗೆದುಕೊಳ್ಳುತ್ತಾರೆ ಎನ್ನುವ ವಿಶ್ವಾಸವಿದೆ ಎಂದೂ ಶತ್ರುಘ್ನ ಸಿನ್ಹಾ ವಿಶ್ವಾಸ ವ್ಯಕ್ತಪಡಿಸಿದ್ದಾರೆ. ʼʼನಮ್ಮ ಮಗಳ ನಿರ್ಧಾರ ಯಾವತ್ತೂ ಸರಿಯಾಗಿರುತ್ತದೆ ಎನ್ನುವ ವಿಶ್ವಾಸವಿದೆ. ಅವಳು ಎಂದಿಗೂ ಸಂವಿಧಾನೇತರ ಅಥವಾ ಕಾನೂನುಬಾಹಿರ ನಿರ್ಧಾರವನ್ನು ತೆಗೆದುಕೊಳ್ಳುವುದಿಲ್ಲ. ಅವಳು ಪ್ರಬುದ್ಧೆಯಾಗಿದ್ದು, ಸ್ವಂತ ನಿರ್ಧಾರಗಳನ್ನು ತೆಗೆದುಕೊಳ್ಳುವ ಹಕ್ಕನ್ನು ಹೊಂದಿದ್ದಾಳೆ. ನನ್ನ ಮಗಳ ಮದುವೆಯಲ್ಲಿ ಡ್ಯಾನ್ಸ್ ಮಾಡಲು ಇಷ್ಟಪಡುತ್ತೇನೆʼʼ ಎಂದು ಅವರು ತಿಳಿಸಿದ್ದಾರೆ.

ಸೋನಾಕ್ಷಿ ಹಾಗೂ ಜಹೀರ್ ಹಲವು ವರ್ಷಗಳಿಂದ ಸುತ್ತಾಟ ನಡೆಸುತ್ತಿದ್ದರೂ ಪ್ರೀತಿ ವಿಚಾರವನ್ನು ಎಂದಿಗೂ ಒಪ್ಪಿಕೊಂಡಿಲ್ಲ. ಇತ್ತೀಚೆಗೆ ಇವರು ನಿಶ್ಚಿತಾರ್ಥ ಮಾಡಿಕೊಂಡಿದ್ದಾರೆ ಎನ್ನಲಾಗಿತ್ತು. ಇವರು ಈಗ ವಿವಾಹ ಆಗುವ ನಿರ್ಧಾರ ತೆಗೆದುಕೊಂಡಿದ್ದಾರೆ ಎಂದೂ ಕೆಲವು ಮಾಧ್ಯಮಗಳು ವರದಿ ಮಾಡಿವೆ. ಸೋನಾಕ್ಷಿ 2010ರಲ್ಲಿ ಸಲ್ಮಾನ್‌ ಖಾನ್‌ ಅಭಿನಯದ ʻದಬಾಂಗ್‌ʼ ಸಿನಿಮಾ ಮೂಲಕ ಬಾಲಿವುಡ್‌ಗೆ ಪದಾರ್ಪಣೆ ಮಾಡಿದರೆ, ಜಹೀರ್ ಅವರ ಮೊದಲ ಚಿತ್ರ 2019ರಲ್ಲಿ ತೆರೆ ಕಂಡ ʻನೋಟ್‌ಬುಕ್ʼ. ಇತ್ತೀಚೆಗೆ ತೆರೆಕಂಡ ʻಡಬಲ್ ಎಕ್ಸ್‌ಎಲ್‌ʼ ಸಿನಿಮಾದಲ್ಲಿ ಜಹೀರ್ ಹಾಗೂ ಸೋನಾಕ್ಷಿ ಸಿನ್ಹಾ ಒಟ್ಟಿಗೆ ನಟಿಸಿದ್ದರು.

ಇದನ್ನೂ ಓದಿ: Sonakshi Sinha : ಪ್ರೀತಿಯಲ್ಲಿ ಬಿದ್ದ ಸೋನಾಕ್ಷಿ, ಲವ್‌ ಯು ಎಂದು ಪೋಸ್ಟ್‌ ಹಾಕಿದ ಬಾಯ್‌ಫ್ರೆಂಡ್‌ ಯಾರು ನೋಡಿ!

ಈ ಹಿಂದೆ ಬಿಜೆಪಿಯಲ್ಲಿದ್ದ ಶತ್ರುಘ್ನ ಸಿನ್ಹಾ ಕೆಲವು ವರ್ಷಗಳ ಹಿಂದೆ ಹೊರ ಬಂದಿದ್ದರು. ಈ ಲೋಕಸಭಾ ಚುನಾವಣೆಯಲ್ಲಿ ಅವರು ಪಶ್ಚಿಮ ಬಂಗಾಳದ ಅಸೋಲ್‌ ಕ್ಷೇತ್ರದಿಂದ ಟಿಎಂಸಿಯಿಂದ ಸ್ಪರ್ಧಿಸಿ ಜಯ ಗಳಿಸಿದ್ದಾರೆ. ಬಿಜೆಪಿ ಅಭ್ಯರ್ಥಿ ಸುರೇಂದ್ರಜೀತ್ ಸಿಂಗ್ ಅಹ್ಲುವಾಲಿಯಾ ವಿರುದ್ಧ 59,564 ಮತಗಳ ಅಂತರದಿಂದ ಗೆದ್ದಿದ್ದಾರೆ.

Continue Reading

ಸಿನಿಮಾ

Noor Malabika Das: ಕಾಜೋಲ್‌ ಜತೆ ನಟಿಸಿದ್ದ, ದಿ ಟ್ರಯಲ್‌ ಖ್ಯಾತಿಯ ಬಾಲಿವುಡ್‌ ನಟಿ ದಾಸ್‌ ಆತ್ಮಹತ್ಯೆ

Noor Malabika Das: ನೂರ್‌ ಮಾಳವಿಕಾ ದಾಸ್‌ ಅವರು ಹಿಂದಿ ಸಿನಿಮಾಗಳು ಹಾಗೂ ವೆಬ್‌ಸಿರೀಸ್‌ಗಳಲ್ಲಿ ನಟಿಸಿ ಖ್ಯಾತಿ ಗಳಿಸಿದ್ದರು. ಸಿಸ್ಕಿಯಾನ್‌, ವಾಕ್‌ಮನ್‌, ತೀತ್ರಿ ಚಟ್ನಿ, ಜಜ್ಞ ಉಪಾಯ್‌, ಚಾರ್‌ಮಸುಖ್‌, ದೇಖ್‌ ಅನ್‌ದೇಖಿ, ಬ್ಯಾಕ್‌ರೋಡ್‌ ಹಲ್‌ಚಲ್‌ ಸೇರಿ ಹಲವು ಸಿನಿಮಾ, ಸಿರೀಸ್‌ಗಳಲ್ಲಿ ನಟಿಸಿ ಸೈ ಎನಿಸಿಕೊಂಡಿದ್ದರು. ಇನ್‌ಸ್ಟಾಗ್ರಾಂನಲ್ಲೂ ಅವರು ಸಕ್ರಿಯರಾಗಿದ್ದರು. ಆದರೆ, ಅವರ ಆತ್ಮಹತ್ಯೆಗೆ ಕಾರಣ ಗೊತ್ತಾಗಿಲ್ಲ.

VISTARANEWS.COM


on

Noor Malabika Das
Koo

ಮುಂಬೈ: ಬಾಲಿವುಡ್‌ ನಟಿ ಕಾಜೋಲ್‌ ಅಭಿನಯದ ದಿ ಟ್ರಯಲ್‌ (The Trial) ವೆಬ್‌ ಸಿರೀಸ್‌ ಖ್ಯಾತಿ ನಟಿ ನೂರ್‌ ಮಾಳವಿಕಾ ದಾಸ್‌ (Noor Malabika Das) ಅವರು ಮುಂಬೈನಲ್ಲಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎಂದು ಪೊಲೀಸ್‌ ಮೂಲಗಳು ತಿಳಿಸಿವೆ. ಲೋಖಂಡ್‌ವಾಲಾದಲ್ಲಿರುವ ತಮ್ಮ ಫ್ಲ್ಯಾಟ್‌ನಲ್ಲಿ 32 ವರ್ಷದ ಬಾಲಿವುಡ್‌ ನಟಿಯು ಫ್ಯಾನ್‌ಗೆ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಜೂನ್‌ 6ರಂದೇ ಅವರು ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎಂಬುದಾಗಿ ಮೂಲಗಳು ತಿಳಿಸಿವೆ.

ಜೂನ್‌ 6ರಂದೇ ನಟಿ ಆತ್ಮಹತ್ಯೆ ಮಾಡಿಕೊಂಡಿದ್ದು, ಯಾರಿಗೂ ಗೊತ್ತಾಗಿಲ್ಲ. ಮನೆಯಲ್ಲಿ ಯಾರೂ ಇರಲಿಲ್ಲ ಹಾಗೂ ಅಕ್ಕಪಕ್ಕದ ಮನೆಯವರಿಗೂ ವಿಷಯ ಗೊತ್ತಾಗಿಲ್ಲ. ಕೆಲ ದಿನಗಳ ಬಳಿಕ ಅಪಾರ್ಟ್‌ಮೆಂಟ್‌ನಲ್ಲಿ ದುರ್ವಾಸನೆ ಕಂಡುಬಂದಿದ್ದು, ಕೂಡಲೇ ನಿವಾಸಿಗಳು ಪೊಲೀಸರಿಗೆ ಮಾಹಿತಿ ನೀಡಿದ್ದಾರೆ. ಪೊಲೀಸರು ಬಂದು ಫ್ಲ್ಯಾಟ್‌ ಬಾಗಿಲು ತೆಗೆದಾಗ ನಟಿಯ ಶವವು ಕೊಳೆತ ರೀತಿಯಲ್ಲಿ ಪತ್ತೆಯಾಗಿದೆ. ಅಂಧೇರಿಯ ಓಶ್ವಿವಾರ ಪ್ರದೇಶದಲ್ಲಿರುವ ಫ್ಲ್ಯಾಟ್‌ನಲ್ಲಿ ನಟಿಯು ವಾಸವಿದ್ದರು.

ನೂರ್‌ ಮಾಳವಿಕಾ ದಾಸ್‌ ಅವರು ಹಿಂದಿ ಸಿನಿಮಾಗಳು ಹಾಗೂ ವೆಬ್‌ಸಿರೀಸ್‌ಗಳಲ್ಲಿ ನಟಿಸಿ ಖ್ಯಾತಿ ಗಳಿಸಿದ್ದರು. ಸಿಸ್ಕಿಯಾನ್‌, ವಾಕ್‌ಮನ್‌, ತೀತ್ರಿ ಚಟ್ನಿ, ಜಜ್ಞ ಉಪಾಯ್‌, ಚಾರ್‌ಮಸುಖ್‌, ದೇಖ್‌ ಅನ್‌ದೇಖಿ, ಬ್ಯಾಕ್‌ರೋಡ್‌ ಹಲ್‌ಚಲ್‌ ಸೇರಿ ಹಲವು ಸಿನಿಮಾ, ಸಿರೀಸ್‌ಗಳಲ್ಲಿ ನಟಿಸಿ ಸೈ ಎನಿಸಿಕೊಂಡಿದ್ದರು. ಅದರಲ್ಲೂ, ದಿ ಟ್ರಯಲ್‌ ವೆಬ್‌ಸಿರೀಸ್‌ ಅವರಿಗೆ ಹೆಚ್ಚು ಹೆಸರು ತಂದುಕೊಂಡಿತ್ತು. ಕಾಜೋಲ್‌ ಜತೆ ಅವರು ತೆರೆ ಹಂಚಿಕೊಂಡಿದ್ದರು. ಅವರು ನಟಿಸಿದ ಕೆಲ ಸಿನಿಮಾಗಳು ಬಿಡುಗಡೆಗೆ ಬಾಕಿ ಇವೆ ಎಂದು ತಿಳಿದುಬಂದಿದೆ.

ಅಸ್ಸಾಂ ಮೂಲದವರಾದ ನೂರ್‌ ಮಾಳವಿಕಾ ದಾಸ್‌ ಅವರು ನಟನೆಗೆ ಕಾಲಿಡುವ ಮೊದಲು ಕತಾರ್‌ ಏರ್‌ವೇಸ್‌ನಲ್ಲಿ ಗಗನಸಖಿಯಾಗಿದ್ದರು. ಇನ್‌ಸ್ಟಾಗ್ರಾಂನಲ್ಲಿ 1.63 ಲಕ್ಷ ಫಾಲೋವರ್‌ಗಳನ್ನು ಹೊಂದಿರುವ ನಟಿಯು ಆಗಾಗ ಫೋಟೊ ಹಾಗೂ ವಿಡಿಯೊಗಳನ್ನು ಪೋಸ್ಟ್‌ ಮಾಡುತ್ತ ಸಕ್ರಿಯರಾಗಿದ್ದರು. ಕೆಲ ದಿನಗಳ ಹಿಂದಷ್ಟೇ ನಟಿಯು ಇನ್‌ಸ್ಟಾಗ್ರಾಂನಲ್ಲಿ ಪೋಸ್ಟ್‌ ಕೂಡ ಮಾಡಿದ್ದರು. ಇಷ್ಟೆಲ್ಲ ಸಕ್ರಿಯರಾಗಿದ್ದ ನಟಿಯು ಆತ್ಮಹತ್ಯೆ ಮಾಡಿಕೊಳ್ಳಲು ಕಾರಣ ಏನೆಂದು ತಿಳಿದುಬಂದಿಲ್ಲ.

ಇದನ್ನೂ ಓದಿ: ನಟಿ ಪವಿತ್ರ ಜಯರಾಮ್‌ ಸಾವಿನ ಬೆನ್ನಲ್ಲೇ ಪ್ರಿಯತಮ ಚಂದ್ರಕಾಂತ್ ಆತ್ಮಹತ್ಯೆ; ಖಿನ್ನತೆಗೆ ನಟ ಬಲಿ?

Continue Reading

ಬಾಲಿವುಡ್

Sonakshi Sinha: ಜಹೀರ್ ಇಕ್ಬಾಲ್ ಜತೆ ಜೂನ್ 23ರಂದು ಸೋನಾಕ್ಷಿ ಸಿನ್ಹಾ ಅದ್ಧೂರಿ ಮದುವೆ?

Sonakshi Sinha: ಸೋನಾಕ್ಷಿ 2010ರಲ್ಲಿ ʻದಬಾಂಗ್‌ʼ ಸಿನಿಮಾದಿಂದ ಬಾಲಿವುಡ್‌ಗೆ ಪದಾರ್ಪಣೆ ಮಾಡಿದರೆ, ಜಹೀರ್ ಅವರ ಮೊದಲ ಚಿತ್ರ 2019ರಲ್ಲಿ ತೆರೆ ಕಂಡ ʻನೋಟ್‌ಬುಕ್ʼ ಆಗಿತ್ತು. ʻಡಬಲ್ ಎಕ್ಸ್‌ಎಲ್‌ʼ ಸಿನಿಮಾದಲ್ಲಿ ಜಹೀರ್ ಇಕ್ಬಾಲ್ ಹಾಗೂ ಸೋನಾಕ್ಷಿ ಸಿನ್ಹಾ ಒಟ್ಟಿಗೆ ನಟಿಸಿದ್ದರುಈ ಹಿಂದೆ ಸಲ್ಮಾನ್‌ ಖಾನ್‌ ಅವರ ಸಹೋದರಿ ಅರ್ಪಿತಾ ಖಾನ್‌ ತಮ್ಮ ಇನ್‌ಸ್ಟಾಗ್ರಾಂ ಸ್ಟೋರಿಯಲ್ಲಿ ಸೋನಾಕ್ಷಿಯನ್ನು “ಅತ್ತಿಗೆ” ಎಂದು ಕರೆದಿದ್ದರು. ಕೆಲವೇ ಕ್ಷಣಗಳಲ್ಲಿ ಆ ಸ್ಟೋರಿಯನ್ನು ಡಿಲೀಟ್‌ ಮಾಡಿದ್ದರು ಕೂಡ. ಆಗ ಸೋನಾಕ್ಷಿ ಹಾಗೂ ಜಹೀರ್‌ ನಡುವೆ ಸಂಬಂಧ ಇದೆ ಎಂಬ ಸುದ್ದಿ ವೈರಲ್‌ ಆಗಿತ್ತು. .

VISTARANEWS.COM


on

Sonakshi Sinha to marry boyfriend Zaheer Iqbal on June 23
Koo

ಬೆಂಗಳೂರು: ಬಾಲಿವುಡ್‌ ನಟಿ ಸೋನಾಕ್ಷಿ ಸಿನ್ಹಾ (Sonakshi Sinha) ಅವರು ತಮ್ಮ ಬಾಯ್‌ಫ್ರೆಂಡ್‌ ನಟ ಜಹೀರ್ ಇಕ್ಬಾಲ್ ಜತೆ ಜೂನ್ 23ರಂದು ಮದುವೆಯಾಗಲಿದ್ದಾರೆ ಎಂದು ವರದಿಯಾಗಿದೆ. ಸೋನಾಕ್ಷಿ ಮತ್ತು ಜಹೀರ್ ದಕ್ಷಿಣ ಮುಂಬೈನಲ್ಲಿ ಮದುವೆಯಾಗಲಿದ್ದಾರೆ ಎಂದು ವರದಿಯಾಗಿದೆ. ಆದರೆ ಜೋಡಿ ಎಲ್ಲಿಯೂ ತಮ್ಮ ಮದುವೆ ಬಗ್ಗೆ ಅಧಿಕೃತ ಮಾಹಿತಿ ಹಂಚಿಕೊಂಡಿಲ್ಲ.

ಸೋನಾಕ್ಷಿ ಹಾಗೂ ಜಹೀರ್ ಹಲವು ವರ್ಷಗಳಿಂದ ಸುತ್ತಾಟ ನಡೆಸುತ್ತಿದ್ದರೂ ಪ್ರೀತಿ ವಿಚಾರವನ್ನು ಒಪ್ಪಿಕೊಂಡಿಲ್ಲ. ಇತ್ತೀಚೆಗೆ ಇವರು ನಿಶ್ಚಿತಾರ್ಥ ಮಾಡಿಕೊಂಡಿದ್ದಾರೆ ಎನ್ನಲಾಗಿತ್ತು. ಇವರು ಈಗ ವಿವಾಹ ಆಗುವ ನಿರ್ಧಾರ ತೆಗೆದುಕೊಂಡಿದ್ದಾರೆ ಎನ್ನಲಾಗಿದೆ. ಸೋನಾಕ್ಷಿ 2010ರಲ್ಲಿ ʻದಬಾಂಗ್‌ʼ ಸಿನಿಮಾದಿಂದ ಬಾಲಿವುಡ್‌ಗೆ ಪದಾರ್ಪಣೆ ಮಾಡಿದರೆ, ಜಹೀರ್ ಅವರ ಮೊದಲ ಚಿತ್ರ 2019ರಲ್ಲಿ ತೆರೆ ಕಂಡ ʻನೋಟ್‌ಬುಕ್ʼ ಆಗಿತ್ತು. ʻಡಬಲ್ ಎಕ್ಸ್‌ಎಲ್‌ʼ ಸಿನಿಮಾದಲ್ಲಿ ಜಹೀರ್ ಇಕ್ಬಾಲ್ ಹಾಗೂ ಸೋನಾಕ್ಷಿ ಸಿನ್ಹಾ ಒಟ್ಟಿಗೆ ನಟಿಸಿದ್ದರು.

ಮುಂಬೈನ ಬಾಸ್ಟಿಯನ್​ನಲ್ಲಿ ವಿವಾಹ ನಡೆಯಲಿದೆ ಎನ್ನಲಾಗಿದೆ. ಜಹೀರ್ ಅವರನ್ನು ಸೋನಾಕ್ಷಿ ಭೇಟಿ ಮಾಡಿದ್ದು ಸಲ್ಮಾನ್ ಖಾನ್ ಮೂಲಕ. ಸಲ್ಲು ಹಾಗೂ ಜಹೀರ್ ಗೆಳೆಯರು. ಭೇಟಿ ಬಳಿಕ ಸೋನಾಕ್ಷಿ ಹಾಗೂ ಜಹೀರ್ ಮಧ್ಯೆ ಫ್ರೆಂಡ್​ಶಿಪ್ ಬೆಳೆಯಿತು. ಆ ಬಳಿಕ ಅದು ಪ್ರೀತಿಗೆ ತಿರುಗಿತು ಎನ್ನಲಾಗಿದೆ.

ಕಳೆದ ವಾರ ಸೋನಾಕ್ಷಿ ಅವರ ಹುಟ್ಟುಹಬ್ಬದಂದು, ಜಹೀರ್ ಹಲವು ಫೋಟೊಗಳನ್ನು ಹಂಚಿಕೊಂಡಿದ್ದರು. ಮೊದಲ ಚಿತ್ರದಲ್ಲಿ ಸೋನಾಕ್ಷಿ ಅವರನ್ನು ಜಹೀರ್ ಬಿಗಿಯಾಗಿ ಅಪ್ಪಿಕೊಳ್ಳುವುದು ಇದೆ. “ಜನ್ಮದಿನದ ಶುಭಾಶಯಗಳು ಸೋನಾʼʼಎಂದು ಶೀರ್ಷಿಕೆ ನೀಡಿದ್ದರು.

ಈ ಹಿಂದೆ ಸಲ್ಮಾನ್‌ ಖಾನ್‌ ಅವರ ಸಹೋದರಿ ಅರ್ಪಿತಾ ಖಾನ್‌ ತಮ್ಮ ಇನ್‌ಸ್ಟಾಗ್ರಾಂ ಸ್ಟೋರಿಯಲ್ಲಿ ಸೋನಾಕ್ಷಿಯನ್ನು “ಅತ್ತಿಗೆ” ಎಂದು ಕರೆದಿದ್ದರು. ಕೆಲವೇ ಕ್ಷಣಗಳಲ್ಲಿ ಆ ಸ್ಟೋರಿಯನ್ನು ಡಿಲೀಟ್‌ ಮಾಡಿದ್ದರು ಕೂಡ. ಆಗ ಸೋನಾಕ್ಷಿ ಹಾಗೂ ಜಹೀರ್‌ ನಡುವೆ ಸಂಬಂಧ ಇದೆ ಎಂಬ ಸುದ್ದಿ ವೈರಲ್‌ ಆಗಿತ್ತು.

ಇದನ್ನೂ ಓದಿ: Sonakshi Sinha : ಪ್ರೀತಿಯಲ್ಲಿ ಬಿದ್ದ ಸೋನಾಕ್ಷಿ, ಲವ್‌ ಯು ಎಂದು ಪೋಸ್ಟ್‌ ಹಾಕಿದ ಬಾಯ್‌ಫ್ರೆಂಡ್‌ ಯಾರು ನೋಡಿ!

ಸೋನಾಕ್ಷಿ ಕೊನೆಯದಾಗಿ ಸಂಜಯ್ ಲೀಲಾ ಬನ್ಸಾಲಿಯವರ ಸಿರೀಸ್‌ ಹೀರಾಮಂಡಿ: ದಿ ಡೈಮಂಡ್ ಬಜಾರ್‌ನಲ್ಲಿ ಕಾಣಿಸಿಕೊಂಡಿದ್ದರು. ಹೀರಾಮಂಡಿ: ದಿ ಡೈಮಂಡ್ ಬಜಾರ್‌ ಸದ್ಯ ನೆಟ್‌ಫ್ಲಿಕ್ಸ್‌ನಲ್ಲಿ ಸ್ಟ್ರೀಮ್ ಆಗುತ್ತಿದೆ. ಹೀರಾಮಂಡಿ: ದಿ ಡೈಮಂಡ್ ಬಜಾರ್‌ನಲ್ಲಿ ಮನಿಶಾ ಕೊಯಿರಾಲಾ, ರಿಚಾ ಚಡ್ಡಾ, ಸಂಜೀದಾ ಶೇಖ್, ಅದಿತಿ ರಾವ್ ಹೈದರಿ, ಶರ್ಮಿನ್ ಸೆಗಲ್ ಮೆಹ್ತಾ, ಫರೀದಾ ಜಲಾಲ್, ಫರ್ದೀನ್ ಖಾನ್ ಮತ್ತು ಅಧ್ಯಯನ್ ಸುಮನ್ ಪ್ರಮುಖ ಪಾತ್ರಗಳಲ್ಲಿ ನಟಿಸಿದ್ದಾರೆ.

Continue Reading
Advertisement
AUS vs NAM
ಕ್ರೀಡೆ11 mins ago

AUS vs NAM: 17 ವರ್ಷಗಳ ಹಿಂದಿನ ಅನಗತ್ಯ ಟಿ20 ದಾಖಲೆ ಮುರಿದ ಗೆರ್ಹಾರ್ಡ್ ಎರಾಸ್ಮಸ್

Actor Darshan Arrested
ಪ್ರಮುಖ ಸುದ್ದಿ32 mins ago

Actor Darshan Arrested: ರೇಣುಕಾಸ್ವಾಮಿಗೆ ದರ್ಶನ್‌ ಗ್ಯಾಂಗ್‌ನಿಂದ ಕ್ರೂರ ಹಿಂಸೆ; ಪೋಸ್ಟ್‌ಮಾರ್ಟಂ ವರದಿಯಲ್ಲಿದೆ ಭಯಾನಕ ಡಿಟೇಲ್ಸ್‌

Actor Darshan
ಕರ್ನಾಟಕ38 mins ago

Actor Darshan: ದರ್ಶನ್‌ ಹೀರೋ ಅಲ್ಲ ಖಳನಾಯಕ, ಆತನಿಗೆ ಶಿಕ್ಷೆ ಆಗಲೇಬೇಕು: ರೇಣುಕಾ ಸ್ವಾಮಿ ತಂದೆ ಕಿಡಿ

KKRDB Chairman Dr Ajay Singh pressmeet in Kalaburagi
ಕರ್ನಾಟಕ45 mins ago

Kalaburagi News: ಜೂ.14ರಂದು ಸಿಎಂ ನೇತೃತ್ವದಲ್ಲಿ ಕಲ್ಯಾಣ ಕರ್ನಾಟಕ ಅಭಿವೃದ್ಧಿ ಮಂಡಳಿ ಪ್ರಗತಿ ಪರಿಶೀಲನಾ ಸಭೆ

Actor Darshan Ban From Sandalwood If Murder Allegation
ಸ್ಯಾಂಡಲ್ ವುಡ್49 mins ago

Actor Darshan: ಚಿತ್ರರಂಗದಿಂದ ಬ್ಯಾನ್‌ ಆಗ್ತಾರಾ ದರ್ಶನ್? ಫಿಲ್ಮ್ ಚೇಂಬರ್ ಅಧ್ಯಕ್ಷರು ಹೇಳಿದ್ದೇನು?

IND vs USA
ಕ್ರೀಡೆ52 mins ago

IND vs USA: ಪಂದ್ಯಕ್ಕೆ ಮಳೆ ಭೀತಿ; ಪಂದ್ಯ ರದ್ದಾದರೆ ಉಭಯ ತಂಡಗಳು ಸೂಪರ್​-8 ಪ್ರವೇಶ

Sebi Fines
ವಾಣಿಜ್ಯ58 mins ago

Sebi Fines: ವಂಚನೆ ಪ್ರಕರಣ; ಟಿವಿ ನಿರೂಪಕ, ವಿಶ್ಲೇಷಕನಿಗೆ ತಲಾ 1 ಕೋಟಿ ರೂ. ದಂಡ ವಿಧಿಸಿದ ಸೆಬಿ

Viral News
ಪ್ರಮುಖ ಸುದ್ದಿ1 hour ago

Viral News: ರೈಲಿನಲ್ಲಿ ಜನಿಸಿದ ತಮ್ಮ ಮಗುವಿಗೆ ʼಮಹಾಲಕ್ಷ್ಮಿʼ ಎಂದು ಹೆಸರಿಟ್ಟಿದ್ದೇಕೆ ಮುಸ್ಲಿಂ ದಂಪತಿ?

Actor Darshan The murder was done by team in the style movie
ಸ್ಯಾಂಡಲ್ ವುಡ್1 hour ago

Actor Darshan: ಲಾರಿಗೆ ತಲೆಯನ್ನು ಬಡಿದು ಸಿನಿಮಾ ಶೈಲಿಯಲ್ಲೇ ರೇಣುಕಾ ಸ್ವಾಮಿ ಕೊಲೆ ಮಾಡಿದ್ದ ದರ್ಶನ್ ಗ್ಯಾಂಗ್​!

Renukaswamy murder case
ಕರ್ನಾಟಕ2 hours ago

Renuka Swamy Murder Case: ಚಿತ್ರದುರ್ಗದಲ್ಲಿ ಮೌನ ಪ್ರತಿಭಟನೆ; ದರ್ಶನ್‌ ಸೇರಿ ಇತರ ಆರೋಪಿಗಳಿಗೆ ಜೀವಾವಧಿ ಶಿಕ್ಷೆಗೆ ಆಗ್ರಹ

Sharmitha Gowda in bikini
ಕಿರುತೆರೆ8 months ago

Geetha Serial Kannada: ನಿದ್ದೆ ಕದ್ದ ಚೋರಿ! ನಟಿ `ಭಾನುಮತಿ’ ಹಾಟ್‌ ಪೋಟೊಗಳಿಗೆ ಫ್ಯಾನ್ಸ್ ಫುಲ್ ಫಿದಾ

Kannada Serials
ಕಿರುತೆರೆ8 months ago

Kannada Serials TRP: 2ನೇ ಸ್ಥಾನದಲ್ಲಿ 2 ಧಾರಾವಾಹಿಗಳು; ಟಿಆರ್‌ಪಿ ರೇಸ್‌ನಲ್ಲಿಲ್ಲ ಭಾಗ್ಯಲಕ್ಷ್ಮೀ!

Bigg Boss- Saregamapa 20 average TRP
ಕಿರುತೆರೆ8 months ago

Kannada Serials TRP: ಏಳನೇ ಸ್ಥಾನಕ್ಕೆ ʻಅಮೃತಧಾರೆʼ ಕುಸಿತ; ಬಿಗ್‌ ಬಾಸ್‌-ಸರಿಗಮಪ ಟಿಆರ್‌ಪಿ ಎಷ್ಟು?

galipata neetu
ಕಿರುತೆರೆ7 months ago

Kanyadana Serial: ಕಿರುತೆರೆಗೆ ಮತ್ತೆ ಎಂಟ್ರಿ ಕೊಟ್ಟ ʻಗಾಳಿಪಟʼ ಖ್ಯಾತಿಯ ʻನೀತುʼ!

Kannada Serials
ಕಿರುತೆರೆ9 months ago

Kannada Serials TRP: ನಾಲ್ಕನೇ ಸ್ಥಾನಕ್ಕೆ ಕುಸಿತ ಕಂಡ ʻಸೀತಾ ರಾಮʼ; ಟಿಆರ್‌ಪಿ ರೇಸ್‌ಗೆ ʻಭಾಗ್ಯಲಕ್ಷ್ಮಿʼ ಬ್ಯಾಕ್‌!

Kannada Serials
ಕಿರುತೆರೆ8 months ago

Kannada Serials TRP: ಟಿಆರ್‌ಪಿಯಲ್ಲಿ ʻಭಾಗ್ಯಲಕ್ಷ್ಮೀʼ ಹವಾ; ʻಪುಟ್ಟಕ್ಕನ ಮಕ್ಕಳುʼ ಧಾರಾವಾಹಿಗೆ ಸಂಕಷ್ಟ!

Bigg Boss' dominates TRP; Sita Rama fell to the sixth position
ಕಿರುತೆರೆ8 months ago

Kannada Serials TRP: ಟಿಆರ್‌ಪಿಯಲ್ಲಿ ʻಬಿಗ್ ಬಾಸ್ʼದೇ ಮೇಲುಗೈ; 6ನೇ ಸ್ಥಾನಕ್ಕೆ ಕುಸಿದ ʻಸೀತಾ ರಾಮʼ

geetha serial Dhanush gowda engagement
ಕಿರುತೆರೆ6 months ago

Dhanush Gowda: ಗೀತಾ ಧಾರಾವಾಹಿ ನಟನ ನಿಶ್ಚಿತಾರ್ಥ; ಭವ್ಯಾಳ ಕಮೆಂಟ್‌ ಬಾಕ್ಸ್‌ ಆಫ್‌!

varun
ಕಿರುತೆರೆ7 months ago

Brindavana Serial: ʼಬೃಂದಾವನʼ ಧಾರಾವಾಹಿಯಲ್ಲಿ ದೊಡ್ಡ ಟ್ವಿಸ್ಟ್‌; ಪ್ರಮುಖ ಪಾತ್ರಧಾರಿಯೇ ಬದಲು

Kannada Serials
ಕಿರುತೆರೆ9 months ago

Kannada Serials TRP: ಟಿಆರ್‌ಪಿಯಲ್ಲಿ ಏರಿಕೆ ಕಂಡ ʻಅಮೃತಧಾರೆʼ; ʻಗಟ್ಟಿಮೇಳʼಕ್ಕೆ ನಾಲ್ಕನೇ ಸ್ಥಾನ!

karnataka weather Forecast
ಮಳೆ22 hours ago

Karnataka Weather : ಭಾರಿ ಮಳೆಗೆ ಗುಡ್ಡದಿಂದ ಉರುಳಿ ಬಿದ್ದ ಬಂಡೆಗಲ್ಲು; ಬೆಂಗಳೂರಲ್ಲೂ ಸಂಜೆ ವರ್ಷಧಾರೆ

actor Darshan
ಚಿತ್ರದುರ್ಗ23 hours ago

Actor Darshan: ರೇಣುಕಾ ಸ್ವಾಮಿ ಕೊಲೆ ಕೇಸ್‌ನಲ್ಲಿ ದರ್ಶನ್‌ ಅರೆಸ್ಟ್‌; ಪ್ರಕರಣವನ್ನು ಸಿಬಿಐಗೆ ವಹಿಸಲು ಒತ್ತಾಯ

Actor Darshan gets a series of questions from the police
ಸಿನಿಮಾ24 hours ago

Actor Darshan : ಪವಿತ್ರಗೌಡ ಬಗ್ಗೆ ಪೋಸ್ಟ್‌ ಮಾಡಿದ್ರೆ ನಿಮಗ್ಯಾಕೆ ಕೋಪ? ದರ್ಶನ್‌ಗೆ ಪೊಲೀಸರ ಪ್ರಶ್ನೆಗಳ ಸುರಿಮಳೆ

Actor Darshan
ಸಿನಿಮಾ1 day ago

Actor Darshan : ದರ್ಶನ್‌ ಜೈಲಿಗೆ ಹೋಗುತ್ತಿರುವುದು ಇದೇ ಮೊದಲಲ್ಲ; ನಟನ ಮೇಲಿವೆ ಹತ್ತಾರು ಕೇಸ್‌ಗಳು!

Saptami Gowda
ಸಿನಿಮಾ1 day ago

Saptami Gowda : ಯುವ ಪತ್ನಿ ಶ್ರೀದೇವಿ ವಿರುದ್ಧ ಮಾನಹಾನಿ ಕೇಸ್; ಕಾನೂನು ಹೋರಾಟಕ್ಕೆ ಮುಂದಾದ ನಟಿ ಸಪ್ತಮಿ ಗೌಡ!

Karnataka weather Forecast
ಮಳೆ2 days ago

Karnataka Weather : ಭಾರಿ ಮಳೆಗೆ ಮನೆ ಗೋಡೆ ಕುಸಿದು ಎಮ್ಮೆಗಳು ಸಾವು; ಆಕಳಿನ ಜೀವ ತೆಗೆದ ವಿದ್ಯುತ್‌ ತಂತಿ

Karnataka weather Forecast
ಮಳೆ5 days ago

Karnataka weather : ಮಳೆಯಲ್ಲೆ ತಪಸ್ಸಿಗೆ ಕುಳಿತ ವೃದ್ಧ; ಇನ್ನೊಂದು ವಾರ ನಾನ್‌ ಸ್ಟಾಪ್‌ ವರುಣನ ಅಬ್ಬರ

Sigandur launch
ಶಿವಮೊಗ್ಗ5 days ago

Sigandur launch: ಸಿಗಂದೂರು ಲಾಂಚ್‌ನಲ್ಲಿ ಭಾರಿ ವಾಹನಗಳಿಗೆ ನಿರ್ಬಂಧ

Karnataka Rain
ಮಳೆ6 days ago

Karnataka Rain : ಭಾರಿ ಮಳೆಗೆ ಮರ ಬಿದ್ದು ಮೇಕೆಗಳು ಸಾವು; ಸಿಡಿಲಿಗೆ ಎಲೆಕ್ಟ್ರಿಕ್‌ ಅಂಗಡಿ ಸುಟ್ಟು ಭಸ್ಮ

Lok Sabha Election Result 2024 Live
ದೇಶ1 week ago

Lok Sabha Election Result 2024 Live: ಲೋಕಸಭೆ ಚುನಾವಣೆ ಫಲಿತಾಂಶದ ಲೈವ್‌ ಇಲ್ಲಿ ವೀಕ್ಷಿಸಿ

ಟ್ರೆಂಡಿಂಗ್‌