Congress Politics : ಪರಿಷತ್‌ ನಾಮನಿರ್ದೇಶನಕ್ಕೆ ದಲಿತ ಟಚ್;‌ ಸುಧಾಮ್‌ ದಾಸ್‌ ವಿರುದ್ಧ ಹೈಕಮಾಂಡ್‌ಗೆ ಪತ್ರ - Vistara News

ಕರ್ನಾಟಕ

Congress Politics : ಪರಿಷತ್‌ ನಾಮನಿರ್ದೇಶನಕ್ಕೆ ದಲಿತ ಟಚ್;‌ ಸುಧಾಮ್‌ ದಾಸ್‌ ವಿರುದ್ಧ ಹೈಕಮಾಂಡ್‌ಗೆ ಪತ್ರ

Congress Politics : ಪರಿಷತ್‌ ನಾಮನಿರ್ದೇಶನ ಜಗಳಕ್ಕೀಗ ಜಾತಿ ಬಣ್ಣ ಬಂದಿದೆ. ಸುಧಾಮ್‌ ದಾಸ್‌ ಹೆಸರಿನ ವಿರುದ್ಧ ದಲಿತ ಸಚಿವರು ತಿರುಗಿಬಿದ್ದಿದ್ದಾರೆ. ಡಿಕೆ ಬ್ರದರ್ಸ್‌ ಆಯ್ಕೆ ವಿರುದ್ಧ ಹೈಕಮಾಂಡ್‌ಗೆ ಪತ್ರ ಬರೆದು ಅಸಮಾಧಾನವನ್ನು ತೋಡಿಕೊಂಡಿದ್ದಾರೆ.

VISTARANEWS.COM


on

DK Shivakumar DK suresh and sudham das infront of vidhana soudha
ಮಹತ್ವದ, ಕುತೂಹಲಕರ ಸುದ್ದಿಗಾಗಿ ಫಾಲೊ ಮಾಡಿ
Koo

ಬೆಂಗಳೂರು: ಕಾಂಗ್ರೆಸ್‌ ಪಕ್ಷದಲ್ಲಿ ಆಂತರಿಕ ಸಂಘರ್ಷ (Congress Politics) ತಾರಕಕ್ಕೇರಿದೆ. ಸಚಿವರ ಮೇಲೆ ಶಾಸಕರ ಅಸಮಾಧಾನ ಬಗೆಹರಿದ ಬೆನ್ನಲ್ಲೇ ಈಗ ಡಿಸಿಎಂ ಡಿ.ಕೆ. ಶಿವಕುಮಾರ್‌ (Deputy CM DK Shivakumar) ಹಾಗೂ ಸಂಸದ ಡಿ.ಕೆ. ಸುರೇಶ್‌ (MP DK Suresh) ವಿರುದ್ಧ ದಲಿತ ಸಚಿವರು ತಿರುಗಿಬಿದ್ದಿದ್ದಾರೆ. ವಿಧಾನ ಪರಿಷತ್ ನಾಮನಿರ್ದೇಶನದ ವಿಚಾರದಲ್ಲಿ ಫೈಟ್‌ ಆರಂಭವಾಗಿದೆ. ಈ ಸಂಬಂಧ ಸಚಿವರಾದ ಡಾ. ಜಿ. ಪರಮೇಶ್ವರ್‌, ಕೆ.ಎಚ್.‌ ಮುನಿಯಪ್ಪ (KH Muniyappa), ಆರ್.‌ ಬಿ. ತಿಮ್ಮಾಪುರ (RB Timmapura), ಎಚ್‌.ಸಿ. ಮಹದೇವಪ್ಪ (HC Mahadevappa) ಅವರು ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ (AICC president Mallikarjun Kharge) ಅವರಿಗೆ ನೇರವಾಗಿ ಪತ್ರ ಬರೆದಿದ್ದು ತಮ್ಮ ಅಸಮಾಧಾನವನ್ನು ವ್ಯಕ್ತಪಡಿಸಿದ್ದಾರೆ. ಒಟ್ಟಾರೆಯಾಗಿ ಡಿಕೆ ಬ್ರದರ್ಸ್ ವರ್ಸಸ್ ದಲಿತ ನಾಯಕರ ಜಟಾಪಟಿ ಎನ್ನುವಂತಾಗಿದೆ.

ವಿಧಾನ ಪರಿಷತ್‌ ನಾಮನಿರ್ದೇಶನಕ್ಕೆ ಮಾಜಿ ಆದಾಯ ತೆರಿಗೆ ಅಧಿಕಾರಿ ಸುಧಾಮ್‌ ದಾಸ್ ಹೆಸರು ಶಿಫಾರಸು ಆಗುತ್ತಿದ್ದಂತೆ ವಿಸ್ತಾರ ನ್ಯೂಸ್‌ ಈ ಬಗ್ಗೆ ವರದಿ ಮಾಡಿತ್ತು. ಆಗಷ್ಟೇ ಪಕ್ಷಕ್ಕೆ ಸೇರಿಕೊಂಡವರಿಗೆ ಮಣೆ ಹಾಕಲಾಗಿದೆ. ಈ ಬಗ್ಗೆ ಉಳಿದ ದಲಿತ ನಾಯಕರು ಪ್ರಶ್ನೆ ಮಾಡಿರುವ ಬಗ್ಗೆ ವರದಿ ಉಲ್ಲೇಖಿಸಲಾಗಿತ್ತು. ವಿಸ್ತಾರ ನ್ಯೂಸ್ ಸುದ್ದಿ ಮಾಡಿದ ಬೆನ್ನಲ್ಲೇ ದಲಿತ ಕಾಂಗ್ರೆಸ್‌ ಹಿರಿಯ ನಾಯಕರು ಹೈಕಮಾಂಡ್‌ಗೆ ಪತ್ರ ಬರೆದಿದ್ದರು. ಇದರ ಜತೆಗೆ ರಾಜ್ಯ ಕಾಂಗ್ರೆಸ್‌ನಲ್ಲಿ ಸುಧಾಮ್‌ ದಾಸ್ ಹೆಸರಿಗೆ ಕಾರ್ಯಕರ್ತರಿಂದಲೂ ಅಸಮಾಧಾನ ಕೇಳಿಬಂದಿತ್ತು. Who is Sudamadas ಎಂದು ಕಾರ್ಯಕರ್ತರು ಕೇಳಿದ್ದರು. ದಲಿತ ನಾಯಕರ ನಡೆಗೆ ಆಕ್ರೋಶವನ್ನು ಹೊರಹಾಕಿದ್ದರು.

ಇದನ್ನೂ ಓದಿ: Karnataka Politics : ಕಾಂಗ್ರೆಸ್‌ನಲ್ಲಿ ಸಿಡಿದ ಮತ್ತೊಂದು ಟೀಂ; ಬ್ಯಾಡ್ಮಿಂಟನ್ ಕ್ಲಬ್‌ನಲ್ಲಿ ರಹಸ್ಯ ಸಭೆ!

ಪಕ್ಷಕ್ಕೆ ಸುಧಾಮ್ ದಾಸ್ ಕೊಡುಗೆ ಏನು?

ಪಕ್ಷಕ್ಕೆ ಸುಧಾಮ್ ದಾಸ್ ಕೊಡುಗೆ ಏನು ಎಂದು ದಲಿತ ಸಚಿವರು ಈಗ ವಿರೋಧ ವ್ಯಕ್ತಪಡಿಸಿ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ, ನಾಯಕರಾದ ರಾಹುಲ್ ಗಾಂಧಿ, ಕೆ.ಸಿ. ವೇಣುಗೋಪಾಲ, ರಣದೀಪ್‌ ಸಿಂಗ್ ಸುರ್ಜೇವಾಲ‌ ಅವರಿಗೆ ಪತ್ರ ಬರೆದಿದ್ದಾರೆ. ಇದರ ಜತೆಗೆ ಸಿಎಂ ಸಿದ್ದರಾಮಯ್ಯ, ಡಿಸಿಎಂ ಡಿ.ಕೆ. ಶಿವಕುಮಾರ್‌ಗೂ ಪತ್ರ ಬರೆದಿದ್ದಾರೆ.

ಸುಧಾಮ್ ದಾಸ್ ಪರ ನಿಂತ ಡಿಕೆ‌ ಬ್ರದರ್ಸ್!

ಈ ಬೆಳವಣಿಗೆ ಮಧ್ಯೆಯೂ ಸುಧಾಮ್ ದಾಸ್ ಪರವಾಗಿ ಡಿಕೆ‌ ಬ್ರದರ್ಸ್ ನಿಂತಿದ್ದಾರೆ. ಕೆಲವು ಪ್ರಕರಣಗಳಲ್ಲಿ ಡಿ.ಕೆ. ಬ್ರದರ್ಸ್‌ಗೆ ಸುಧಾಮ್‌ ದಾಸ್‌ ಸಹಾಯ ಮಾಡಿದ್ದಾರೆ. ಮುಂದೆಯೂ‌ ಮಾಡುತ್ತಾರೆ. ಈ ಕಾರಣಕ್ಕಾಗಿ ಅವರ ಅವಶ್ಯಕತೆ ತಮಗಿದೆ ಎಂದು ಬ್ಯಾಟಿಂಗ್ ಮಾಡುತ್ತಿದ್ದಾರೆ ಎಂದು ಮೂಲಗಳು ತಿಳಿಸಿವೆ. ಆದರೆ, ಇದೊಂದು ಬಿಟ್ಟು ಇನ್ನು ಯಾವುದೇ ರೀತಿಯಲ್ಲೂ ಸುಧಾಮ್ ದಾಸ್ ಪಕ್ಷಕ್ಕೆ ಕೊಡುಗೆ ನೀಡಿಲ್ಲ ಎಂಬ ವಿರೋಧ ವ್ಯಕ್ತವಾಗಿದೆ.

ಪತ್ರ ಬರೆದಿದ್ದು ನಿಜ: ಕೆ.ಎಚ್. ಮುನಿಯಪ್ಪ

ಸುಧಾಮ್‌ ದಾಸ್ ಹೆಸರು ಶಿಫಾರಸು ಮಾಡಿರುವ ನಿರ್ಧಾರವನ್ನು ನಾವು ವಿರೋಧ ಮಾಡಿದ್ದೇವೆ. ಹೈಕಮಾಂಡ್‌ಗೆ ಪತ್ರ ಬರೆದಿದ್ದು ನಿಜ. ಮೂರು ತಿಂಗಳ ಹಿಂದೆ ಅವರು ಪಕ್ಷ ಸೇರ್ಪಡೆ ಆಗಿದ್ದಾರೆ. ಇನ್ನಷ್ಟು ದಿನ ಪಕ್ಷದ ಕೆಲಸ ಮಾಡಲಿ ಎಂದು ಮನವಿ ಮಾಡಿದ್ದೇವೆ. ಮೂವತ್ತು ವರ್ಷಗಳಿಂದ ಪಕ್ಷಕ್ಕೆ ಕೆಲಸ ಮಾಡಿದವರು ಇದ್ದಾರೆ. ಅಂಥವರಿಗೆ ಅವಕಾಶ ಕೊಡಿ ಎಂದು ಕೇಳಿದ್ದೇವೆ. ಮುಂದಿನದು ಹೈಕಮಾಂಡ್‌ಗೆ ಬಿಟ್ಟಿದ್ದು ಎಂದು ದಲಿತ ಸಮುದಾಯದ ನಾಯಕ, ಸಚಿವ ಕೆ.ಎಚ್.‌ ಮುನಿಯಪ್ಪ ಪ್ರತಿಕ್ರಿಯೆ ನೀಡಿದ್ದಾರೆ.

ಇದನ್ನೂ ಓದಿ: Ration Card : ಹೊಸ ರೇಷನ್ ಕಾರ್ಡ್ ಸದ್ಯಕ್ಕಿಲ್ಲ; ಗೃಹಲಕ್ಷ್ಮಿ, ಅನ್ನಭಾಗ್ಯದ ಕನಸು ನನಸು ದೂರ!

ನನ್ನ ಅಭಿಪ್ರಾಯವನ್ನು ಹೈಕಮಾಂಡ್‌ಗೆ ಹೇಳುತ್ತೇನೆ: ಆರ್ ಬಿ ತಿಮ್ಮಾಪುರ

ಸುಧಾಮ್ ದಾಸ್ ವಿರುದ್ಧ ಹೈಕಮಾಂಡ್‌ಗೆ ಪತ್ರ ಬರೆದಿರುವುದು ಪಕ್ಷದ ಆಂತರಿಕ ವಿಚಾರವಾಗಿದೆ. ಬೇಕು, ಬೇಡ, ಸಮುದಾಯ, ಪ್ರಾಂತ್ಯ ಅದೆಲ್ಲವೂ ಪಕ್ಷದ ಒಳಗೆ ಚರ್ಚೆಯಾಗುತ್ತದೆ. ನಾನು ಅದನ್ನು ಮಾಧ್ಯಮದ ಮುಂದೆ ಹೇಳುವುದಿಲ್ಲ. ನನ್ನ ಅಭಿಪ್ರಾಯವನ್ನು ಹೈಕಮಾಂಡ್‌ಗೆ ಹೇಳುತ್ತೇನೆ. ನಾನು ಪಕ್ಷದ ಹಿರಿಯ ನಾಯಕರ ಜತೆ ಮಾತನಾಡುತ್ತೇನೆ. ನನ್ನ ಬೇಡಿಕೆಗಳನ್ನು ಪಕ್ಷದ ಹಿರಿಯ ನಾಯಕರ ಜತೆ ಚರ್ಚೆ ಮಾಡುತ್ತೇನೆ. ಪಕ್ಷ ಸಾಕಷ್ಟು ಚಿಂತಿಸಿ ನಿರ್ಧಾರ ಮಾಡಿರುತ್ತದೆ. ಯಾವ ಕಾರಣಕ್ಕೆ ಹೈಕಮಾಂಡ್ ನಿರ್ಧಾರ ಮಾಡಿದೆ ಅನ್ನೋದು ನನಗೆ ಗೊತ್ತಿಲ್ಲ ಎಂದು ಸಚಿವ ಆರ್.ಬಿ. ತಿಮ್ಮಾಪುರ ಹೇಳಿದ್ದಾರೆ.

ಕ್ಷಣ ಕ್ಷಣದ ಮಾಹಿತಿಗಾಗಿ Vistara News FaceBook ಪೇಜ್ ಫಾಲೋ ಮಾಡಿ
ಮಹತ್ವದ ಮಾಹಿತಿಗಾಗಿ ವಿಸ್ತಾರ ನ್ಯೂಸ್ ಆ್ಯಪ್ ಉಚಿತವಾಗಿ ಡೌನ್ ಲೋಡ್ ಮಾಡಿಕೊಳ್ಳಿ: Andriod App | IOS App
Continue Reading
Click to comment

Leave a Reply

Your email address will not be published. Required fields are marked *

ಕರ್ನಾಟಕ

CM Siddaramaiah: ಪ್ರತಿ ಠಾಣೆಗೂ ತೆರಳಿ ಪರಿಶೀಲಿಸಬೇಕು: ಪೊಲೀಸ್‌ ಮೇಲಧಿಕಾರಿಗಳಿಗೆ ಸಿಎಂ ಖಡಕ್‌ ಸೂಚನೆ

CM Siddaramaiah: ರಾಜ್ಯ ಪೊಲೀಸ್ ಮಹಾ ನಿರ್ದೇಶಕರ ಕಚೇರಿಯಲ್ಲಿ 2024ರ ಹಿರಿಯ ಪೊಲೀಸ್ ಅಧಿಕಾರಿಗಳ ಸಮಾವೇಶವನ್ನು ಉದ್ಘಾಟಿಸಿ, ನೂತನ ತಂತ್ರಾಂಶಗಳನ್ನು ಬಿಡುಗಡೆಗೊಳಿಸಿ ಸಿಎಂ ಸಿದ್ದರಾಮಯ್ಯ ಮಾತನಾಡಿದರು.

VISTARANEWS.COM


on

CM Siddaramaiah
Koo

ಬೆಂಗಳೂರು: ಎಸ್‌ಪಿ, ಡಿಸಿಪಿ, ಐಜಿಗಳು ತಮ್ಮ ವ್ಯಾಪ್ತಿಯ ಪ್ರತಿ ಠಾಣೆಗೆ ಭೇಟಿ ನೀಡಿ ಪರಿಶೀಲನೆ ನಡೆಸುವುದು ಕಡ್ಡಾಯ. ನಿಮ್ಮ ವ್ಯಾಪ್ತಿಯಲ್ಲಿ ಕ್ಲಬ್‌ಗಳು, ಇಸ್ಪೀಟ್, ಬೆಟ್ಟಿಂಗ್, ಡ್ರಗ್ಸ್‌ ದಂಧೆ ನಿಲ್ಲಿಸದಿದ್ದರೆ ಎಸ್‌ಪಿ ಮತ್ತು‌ ಐಜಿ ಮಟ್ಟದ ಅಧಿಕಾರಿಗಳನ್ನೂ ನೇರ ಹೊಣೆ ಮಾಡಿ ಕ್ರಮ ತೆಗೆದುಕೊಳ್ಳಲಾಗುವುದು. ಎಸ್‌ಪಿ, ಐಜಿಗಳು ಪ್ರತಿ ಠಾಣೆಗೆ ಹೋಗಿ ಪರಿಶೀಲನೆ ನಡೆಸಿದರೆ ಇವನ್ನೆಲ್ಲಾ ತಪ್ಪಿಸಬಹುದು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ (CM Siddaramaiah) ತಿಳಿಸಿದ್ದಾರೆ.

ರಾಜ್ಯ ಪೊಲೀಸ್ ಮಹಾ ನಿರ್ದೇಶಕರ ಕಚೇರಿಯಲ್ಲಿ 2024ರ ಹಿರಿಯ ಪೊಲೀಸ್ ಅಧಿಕಾರಿಗಳ ಸಮಾವೇಶವನ್ನು ಉದ್ಘಾಟಿಸಿ, ನೂತನ ತಂತ್ರಾಂಶಗಳನ್ನು ಬಿಡುಗಡೆಗೊಳಿಸಿ ಮಾತನಾಡಿದರು. ನಾಳೆಯಿಂದಲೇ ಎಸ್‌ಪಿ, ಐಜಿಗಳು ಠಾಣೆಗಳಿಗೆ ಭೇಟಿ ನೀಡಬೇಕು. ಭೇಟಿ ನೀಡಿ ಅರ್ಧಗಂಟೆಯಲ್ಲಿ ಶಾಸ್ತ್ರ ಮುಗಿಸಬಾರದು. ಕೂಲಂಕಷವಾಗಿ ಪರಿಶೀಲನೆ ನಡೆಸಬೇಕು ಎಂದು ಎಚ್ಚರಿಸಿದರು.

ಫೇಕ್ ನ್ಯೂಸ್ ಪ್ರಸಾರ ತಡೆಗಟ್ಟಿ: ಇಲ್ಲಾಂದ್ರೆ ಕ್ರಮ ಎದುರಿಸಿ

ಫೇಕ್ ನ್ಯೂಸ್‌ಗಳು ಸಮಾಜದ ನೆಮ್ಮದಿಗೆ ಕಂಟಕವಾಗಿವೆ. ಇವು ವಿಪರೀತ ಹೆಚ್ಚಾಗುತ್ತಿವೆ. ಇವುಗಳ ತಡೆಗೆ fact check ಘಟಕಗಳನ್ನು ಮಾಡಿದ್ದೇವೆ. ಆದರೂ ಫೇಕ್ ನ್ಯೂಸ್‌ಗಳು ಹೆಚ್ಚಾಗುತ್ತಿವೆ. ಇದನ್ನು ಸಹಿಸಲು ಸಾಧ್ಯವಿಲ್ಲ. ಸದ್ಯ ಫೇಕ್ ನ್ಯೂಸ್ ತಡೆಯಲು ಆಗುತ್ತಿರುವ ಕೆಲಸ ಸಾಲುತ್ತಿಲ್ಲ. ಹೀಗಾಗಿ ಕೃತಕ ಬುದ್ದಿಮತ್ತೆ ಬಳಸಿ. ಸ್ವಯಂ ಪ್ರೇರಿತ ದೂರುಗಳನ್ನು ಹೆಚ್ಚೆಚ್ಚು ದಾಖಲಿಸಿ ಯಾವುದೇ ಮುಲಾಜಿಲ್ಲದೆ ಕಠಿಣ ಕ್ರಮ ಕೈಗೊಳ್ಳಲೇಬೇಕು ಎಂದು ಸ್ಪಷ್ಟ ಸೂಚನೆ ನೀಡಿದರು.

ಡ್ರಗ್ಸ್ ಪೂರ್ತಿ ನಿಂತಿಲ್ಲ ಏಕೆ?

ಡ್ರಗ್ಸ್ ಮಾರೋರು ಯಾರು? ರೌಡಿಗಳು ಯಾರು?, ರಿಯಲ್ ಎಸ್ಟೇಟ್ ಮಾಡೋರು ಯಾರು ಎನ್ನುವುದು ಆಯಾ ಠಾಣಾಧಿಕಾರಿಗಳಿಗೆ ಗೊತ್ತಿರುತ್ತೆ. ಆದರೂ ಯಾಕೆ ನಿಲ್ಲುತ್ತಿಲ್ಲ‌ ಎಂದು ಪ್ರಶ್ನಿಸಿದ ಸಿಎಂ, ನಿಮಗೆ ಗನ್‌ ಕೊಟ್ಟಿರುವುದು ಏಕೆ? ಈ ಬಗ್ಗೆ ರೌಡಿಗಳಿಗೆ ಏಕೆ ಭಯವಿಲ್ಲ. ರೌಡಿಗಳಿಗೆ ಪೊಲೀಸ್ ಭಯ ಇರಬೇಕು ಎಂದರು.

ಕೆಲವು ಪೊಲೀಸರಿಗೆ ಇ-ಬೀಟ್ ವ್ಯವಸ್ಥೆ ಜಾರಿಯಲ್ಲಿರುವುದೇ ಗೊತ್ತಿಲ್ಲ ಎಂದರೆ ನಾಚಿಕೆಗೇಡು. ಇದನ್ನು ಸರಿಪಡಿಸಿಕೊಳ್ಳಿ ಎಂದು ಸಲಹೆ ನೀಡಿದರು.

ಹಿರಿಯ ಪೊಲೀಸ್ ಅಧಿಕಾರಿಗಳು ನಿಮ್ಮ ಜವಾಬ್ದಾರಿಗಳನ್ನು, ಕರ್ತವ್ಯಗಳನ್ನು ಸರಿಯಾಗಿ ನಿರ್ವಹಿಸಿದರೆ ನಿಮ್ಮ ಕೆಳಗಿನ‌ ಅಧಿಕಾರಿಗಳು‌ ಇನ್ನಷ್ಟು ಪರಿಣಾಮಕಾರಿಯಾಗಿ ಕರ್ತವ್ಯ ನಿರ್ವಹಿಸುತ್ತಾರೆ. ಬೀಟ್ ವ್ಯವಸ್ಥೆ, ಸಂಚಾರ ವ್ಯವಸ್ಥೆ, ಹೈವೇ ಪ್ಯಾಟ್ರೋಲಿಂಗ್ ವ್ಯವಸ್ಥೆಯನ್ನು ತೀವ್ರ ಪರಿಣಾಮಕಾರಿಯಾಗಿ ನಿರ್ವಹಿಸಲು ಸಿಎಂ ಸೂಚನೆ ನೀಡಿದರು.

ಹುಬ್ಬಳ್ಳಿಯಲ್ಲಿ ಒಂದರ ಹಿಂದೆ ಮತ್ತೊಂದು ಕೊಲೆಗಳು ನಡೆದವು. ಇಂಟೆಲಿಜೆಂಟ್ ಪೊಲೀಸರು ಎಚ್ಚರ ಇದ್ದಿದ್ದರೆ ಎರಡನೇ ಕೊಲೆ ತಪ್ಪಿಸಬಹುದಿತ್ತು. ಅದಕ್ಕೇ ಹಿರಿಯ ಅಧಿಕಾರಿಗಳನ್ನು ಸಸ್ಪೆಂಡ್ ಮಾಡಬೇಕಾಯಿತು.‌ ಇವರ ನಿರ್ಲಕ್ಷ್ಯದಿಂದ ಕೊಲೆ ಆಗಿದೆ. ಈ ಕೊಲೆ ತಪ್ಪಿಸಬಹುದಿತ್ತು. ಜನರಿಗೆ ಪೊಲೀಸ್ ಬಳಿ ಹೋದರೆ ನ್ಯಾಯ ಸಿಗುತ್ತದೆ ಎನ್ನುವ ಆತ್ಮ ವಿಶ್ವಾಸ ಹೆಚ್ಚಾಗಬೇಕು. ಶಾಂತಿ ಸಭೆಗಳನ್ನು ಚಾಚೂ ತಪ್ಪದೆ ಕಡ್ಡಾಯವಾಗಿ ನಿಯಮಿತವಾಗಿ ನಡೆಸಲೇಬೇಕು ಎಂದು ಸೂಚಿಸಿದರು.

ಕಾನೂನು ಪ್ರಕಾರ ಕೆಲಸ ಮಾಡದಿದ್ದರೆ ಸಹಿಸಲ್ಲ

ವರ್ಗಾವಣೆಗೆ ಪ್ರಭಾವ ಬೀರುವವರ ವಿರುದ್ಧ, ಹಣ ಕೊಟ್ಟು ಟ್ರಾನ್ಸ್‌ಫರ್‌ಗೆ ಪ್ರಯತ್ನಿಸುವ ಅಧಿಕಾರಿಗಳ ವಿರುದ್ಧ ನಿರ್ದಾಕ್ಷಿಣ್ಯ ಕ್ರಮ ಕೈಗೊಳ್ಳಲಾಗುತ್ತದೆ. ನಿಮಗೆ ಸಮಸ್ಯೆಗಳಿದ್ದರೆ ಗೃಹ ಸಚಿವರು, ಪೊಲೀಸ್ ಮಹಾ ನಿರ್ದೇಶಕರಿಗೆ ತಿಳಿಸಿ ಸರಿಪಡಿಸಿಕೊಳ್ಳಿ. ಕಾನೂನು ಮೀರಿ ಕೆಲಸ ಮಾಡಿ ಎಂದು ಸರ್ಕಾರ ಯಾವತ್ತೂ ಬಯಸಲ್ಲ. ಕಾನೂನು ಪ್ರಕಾರ ಕೆಲಸ ಮಾಡದಿದ್ದರೆ ಸರ್ಕಾರ ಸಹಿಸಲ್ಲ ಎಂದರು.

ಗೃಹ ಸಚಿವರಿಗೆ, ಕರ್ನಾಟಕ‌ ಪೊಲೀಸ್‌ಗೆ ಅಭಿನಂದನೆ

ಕಳೆದ ಒಂದು ವರ್ಷದಲ್ಲಿ ರಾಜ್ಯದಲ್ಲಿ ಕೋಮುಗಲಭೆ ಇಲ್ಲದಂತೆ ಕಾನೂನು ಸುವ್ಯವಸ್ಥೆ ಕಾಪಾಡಿದಕ್ಕೆ ಗೃಹ ಸಚಿವರಿಗೆ, ಕರ್ನಾಟಕ ಪೊಲೀಸ್‌ ಇಲಾಖೆಗೆ ಮುಖ್ಯಮಂತ್ರಿಗಳು ಅಭಿನಂಧಿಸಿದರು.‌

ಕಾರ್ಯಕ್ರಮದಲ್ಲಿ ಗೃಹ ಸಚಿವ ಜಿ.ಪರಮೇಶ್ವರ್, ಮುಖ್ಯಮಂತ್ರಿಗಳ ರಾಜಕೀಯ ಕಾರ್ಯದರ್ಶಿ ನಸೀರ್ ಅಹಮದ್, ಸರ್ಕಾರದ ಮುಖ್ಯ ಕಾರ್ಯದರ್ಶಿ ರಜನೀಶ್ ಗೋಯಲ್, ಗೃಹ ಇಲಾಖೆ ಅಪರ ಮುಖ್ಯ ಕಾರ್ಯದರ್ಶಿ ಎಸ್.ಆರ್.ಉಮಾಶಂಕರ್, ಡಿಜಿ-ಐಜಿ ಡಾ.ಅಲೋಕ್ ಮೋಹನ್, ಸರ್ಕಾರದ ಕಾರ್ಯದರ್ಶಿ ಕೆ.ವಿ.ತ್ರಿಲೋಕ್ ಚಂದ್ರ ಉಪಸ್ಥಿತರಿದ್ದರು.

ನ್ಯಾಯ ನೀಡಿಕೆಯಲ್ಲಿ ಕರ್ನಾಟಕ ಪೊಲೀಸ್‌ಗೆ ದೇಶದಲ್ಲಿ ಪ್ರಥಮ ಸ್ಥಾನ

ದೇಶದ ಪ್ರತಿಷ್ಠಿತ India justice Report ನವರು ನಡೆಸಿದ ಸಮೀಕ್ಷೆ ಮತ್ತು ವರದಿಯಲ್ಲಿ ಕರ್ನಾಟಕ ಪೊಲೀಸ್ ಇಡೀ ದೇಶದಲ್ಲೇ ನ್ಯಾಯ ನೀಡಿಕೆ (Justice delivery) ಯಲ್ಲಿ ಪ್ರಥಮ‌ ಸ್ಥಾನ‌ ಪಡೆದಿದೆ. ಒಟ್ಟು 10 ಅಂಕಗಳನ್ನು ಇಟ್ಟು ನಡೆಸಿದ ವೈಜ್ಞಾನಿಕ ಸಮೀಕ್ಷೆಯಲ್ಲಿ ಕರ್ನಾಟಕ ಪೊಲೀಸ್ 6.38 ಅಂಕಗಳನ್ನು ಗಳಿಸುವ ಮೂಲಕ ಪ್ರಥಮ‌ ಸ್ಥಾನ ಗಳಿಸಿದೆ ಎಂದು India justice Report ಅನ್ನು ಗೃಹ ಸಚಿವ ಜಿ.ಪರಮೇಶ್ವರ್ ಅವರು ಹಿರಿಯ ಪೊಲೀಸ್ ಅಧಿಕಾರಿಗಳ ಸಭೆಯ ಪ್ರಾಸ್ತಾವಿಕ ಮಾತುಗಳಲ್ಲಿ ಪ್ರಸ್ತಾಪಿಸಿ, ಈ ಗುಣಮಟ್ಟ ಕಾಯ್ದುಕೊಳ್ಳುವಂತೆ ಕಿವಿ ಮಾತು ಹೇಳಿದರು.

ಇದನ್ನೂ ಓದಿ | Channapatna By Election: ಚನ್ನಪಟ್ಟಣದಲ್ಲಿ ನನ್ನ ಪತ್ನಿ ಸ್ಪರ್ಧಿಸಲ್ಲ: ಸಂಸದ ಡಾ.ಸಿ.ಎನ್. ಮಂಜುನಾಥ್‌ ಸ್ಪಷ್ಟನೆ

ತಂತ್ರಾಂಶ ಮತ್ತು ಕೈಪಿಡಿ ಬಿಡುಗಡೆ

  • ಸೀನ್ ಆಫ್ ಕ್ರೈಂ ಕೈಪಿಡಿ
  • ಸಂಚಯ: ಹೊಸ ಕ್ರಿಮಿನಲ್ ಕಾನೂನುಗಳ ಡಿಜಿಟಲ್ ತಂತ್ರಾಂಶ, ಆಪ್ ಬಿಡುಗಡೆ.
  • ರಿಯಲ್ ಟೈಂ ಟ್ರಾಕಿಂಗ್ ಆಫ್ ಹೊಯ್ಸಳ ತಂತ್ರಾಂಶ
  • ಬೆಂಗಳೂರು ಸಿಟಿ ಪೊಲೀಸ್- ಸೇಫ್ ಕನೆಕ್ಟ್ (ಕಮಾಂಡ್ ಸೆಂಡರ್ ಜೊತೆಗೆ ನೊಂದವರು ಆಡಿಯೊ, ವಿಡಿಯೊ ಕಾಲ್ ಮೂಲಕ ಸಂಪರ್ಕ‌ ಸಾಧಿಸುವ ಸಾಧನ)
  • ಡಿಜಿಟಲ್ ಅರೆಸ್ಟ್ ಸ್ಕ್ಯಾಮ್ (ಸೈಬರ್ ಕ್ರೈಂ ಕೈಪಿಡಿ) ಬಿಡುಗಡೆ ಮಾಡಲಾಯಿತು.
Continue Reading

ಬೆಂಗಳೂರು

BESCOM Order : ವಿದ್ಯುತ್‌ ಕಂಬಗಳ ಮೇಲೆ ಅನಧಿಕೃತ ಕೇಬಲ್‌ ತೆರವಿಗೆ ಗಡುವು; ಬಿಸಿ ಮುಟ್ಟಿಸಲು ಸಜ್ಜಾದ ಬೆಸ್ಕಾಂ

ಹಿಂದೊಮ್ಮೆ ನಡೆದ ಅವಘಡದಿಂದ ಎಚ್ಚೆತುಕೊಂಡಿರುವ ಬೆಸ್ಕಾಂ, ವಿದ್ಯುತ್‌ ಕಂಬಗಳ ಮೇಲಿನ ಅನಧಿಕೃತ ಕೇಬಲ್‌ಗಳ ತೆರವಿಗೆ ವಿಶೇಷ ಕಾರ್ಯಾಚರಣೆ ನಡೆಸುತ್ತಿದೆ. ಸದ್ಯ ಅನಧಿಕೃತ ಕೇಬಲ್‌ ಅಳವಡಿಸುವವರಿಗೆ ಬಿಸಿಮುಟ್ಟಿಸಿಲು ಮುಂದಾಗಿರುವ ಬೆಸ್ಕಾಂ (BESCOM Order) ಬರುವ ಸೋಮವಾರದವರೆಗೆ ಗಡುವು ನೀಡಿದೆ.

VISTARANEWS.COM


on

By

Bescom Order
ಸಾಂದರ್ಭಿಕ ಚಿತ್ರ
Koo

ಬೆಂಗಳೂರು: ಬೆಸ್ಕಾಂ ವ್ಯಾಪ್ತಿಯಲ್ಲಿರುವ (BESCOM Order) ವಿದ್ಯುತ್‌ ಕಂಬಗಳಲ್ಲಿ ಅನಧಿಕೃತವಾಗಿ ಅಳವಡಿಸಿರುವ ಎಲ್ಲಾ ಓಎಫ್‌ಸಿ ಕೇಬಲ್‌, ಡಾಟ ಕೇಬಲ್‌ ಹಾಗೂ ಡಿಶ್ ಕೇಬಲ್‌ಗಳನ್ನು ತೆರವು ಮಾಡಲು ಸೂಚನೆ ನೀಡಲಾಗಿದೆ. ಜು. 8ರ ಒಳಗೆ ತೆರವುಗೊಳಿಸಲು ಸಂಬಂಧಿಸಿದ ಇಂಟರ್‌ ನೆಟ್‌ ಸೇವಾ ಕಂಪನಿಗಳು, ಟಿವಿ ಕೇಬಲ್‌ ಆಪರೇಟರ್‌ಗಳಿಗೆ ಬೆಸ್ಕಾಂ ಗಡುವು ನೀಡಿದೆ.

ಹಿಂದೊಮ್ಮೆ ಕಳೆದ 2023ರಂದು ಆಗಸ್ಟ್‌ 23 ರಂದು ಬೆಂಗಳೂರಿನ ಸುದ್ಗುಂಟೆಪಾಳ್ಯ ಬಳಿ‌ ಇರುವ ಸೆಂಟ್ ಕ್ರೈಸ್ಟ್ ಕಾಲೇಜು ಬಳಿ ಮನೆಗೆ ತೆರಳುತ್ತಿದ್ದ ವಿದ್ಯಾರ್ಥಿನಿ ಮೇಲೆ ವಿದ್ಯುತ್‌ ತಂತಿ (electric shock) ಬಿದ್ದ ಪರಿಣಾಮ ಗಂಭೀರ ಗಾಯಗೊಂಡಿದ್ದಳು. ಈ ಘಟನೆ ನಡೆದ ದಿನದಿಂದ ಬೆಸ್ಕಾಂ ಅಧಿಕಾರಿಗಳು ಆ್ಯಕ್ವಿವ್‌ ಆಗಿದ್ದಾರೆ.

ವಿದ್ಯುತ್‌ ಕಂಬಗಳಲ್ಲಿ ಅನಧಿಕೃತವಾಗಿ ಅಳವಡಿಸಿರುವ ಓಎಫ್‌ಸಿ, ಕೇಬಲ್‌, ಡಾಟ ಕೇಬಲ್‌ ಹಾಗೂ ಡಿಶ್‌ ಕೇಬಲ್‌ ಗಳನ್ನು ತೆರವುಗೊಳಿಸುವ ಸಂಬಂಧ ಬೆಸ್ಕಾಂ ವಿಶೇಷ ಕಾರ್ಯಾಚರಣೆಯನ್ನು ಕೈಗೊಂಡಿತ್ತು. ಅನಧಿಕೃತ ಡಾಟ ಕೇಬಲ್‌, ಓಎಫ್‌ಸಿ ಕೇಬಲ್‌ ಹಾಗೂ ಡಿಶ್‌ ಕೇಬಲ್‌ಗಳನ್ನು ತೆರವುಗೊಳಿಸಲು ಒಂದು ವಾರಗಳ ಗಡುವು ವಿಧಿಸಿತ್ತು.

ಇದನ್ನೂ ಓದಿ: Murder case : ಯಾದಗಿರಿಯಲ್ಲಿ ಹಸುಗೂಸನ್ನು ಬಾವಿಗೆ ಎಸೆದು ಕೊಂದರು ಹಂತಕರು

ಬೆಸ್ಕಾಂನ ವಿಶೇಷ ಕಾರ್ಯಾಚರಣೆ ಹೊರತಾಗಿಯೂ ಅನಧಿಕೃತ ಕೇಬಲ್‌ಗಳನ್ನು ವಿದ್ಯುತ್‌ ಕಂಬಗಳ ಮೇಲೆ ಡಿಶ್‌ ಕೇಬಲ್‌ ಹಾಗೂ ಡಾಟ ಕೇಬಲ್‌ಗಳನ್ನು ಅಳವಡಿಸಲಾಗಿದೆ. ಹೀಗಾಗಿ ಬೆಸ್ಕಾಂ ವಿದ್ಯುತ್‌ ಕಂಬಗಳಲ್ಲಿ ಹಾಕಿರುವ ಓಎಫ್‌ಸಿ, ಇಂಟರ್‌ ನೆಟ್‌ ಡಾಟ ಕೇಬಲ್‌ ಹಾಗೂ ಡಿಶ್‌ ಕೇಬಲ್‌ಗಳನ್ನು ಬರುವ ಸೋಮವಾರದೊಳಗೆ (08.07.2024) ತೆರವುಗೊಳಿಸಲು ಸೂಚಿಸಿದೆ.

ಸಂಬಂಧಪಟ್ಟ ಇಂಟರ್‌ ನೆಟ್‌ ಕಂಪನಿಗಳು ಹಾಗೂ ಡಿಶ್‌ ಕೇಬಲ್‌ ಅಪರೇಟರ್‌ಗಳು ತೆರವುಗೊಳಿಸಲು ತಪ್ಪಿದ್ದಲ್ಲಿ, ಬೆಸ್ಕಾಂ ಅವುಗಳನ್ನು ಯಾವುದೇ ಮುನ್ಸೂಚನೆ ನೀಡದೆ ತೆರವುಗೊಳಿಸಲಿದೆ. ಜತೆಗೆ ತಪ್ಪಿತಸ್ಥರ ವಿರುದ್ಧ ಕಾನೂನು ರೀತ್ಯ ಕ್ರಮಕೈಗೊಳ್ಳಲಿದೆ ಎಂದು ಬೆಸ್ಕಾಂ ತಿಳಿಸಿದೆ.

ಒಂದು ವೇಳೆ ಅನಧಿಕೃತ ಕೇಬಲ್‌ಗಳಿಂದ ವಿದ್ಯುತ್‌ ಅವಘಡಗಳು ಸಂಭವಿಸಿದ್ದಲ್ಲಿ ಸಂಬಂಧಿಸಿದ ಓಎಫ್‌ಸಿ, ಡಾಟ ಕೇಬಲ್‌, ಡಿಶ್‌ ಕೇಬಲ್‌ ಅಪರೇಟರ್‌ಗಳು ಅಥವಾ ವ್ಯಕ್ತಿಗಳನ್ನು ಹೊಣೆಗಾರರನ್ನಾಗಿ ಮಾಡಲಾಗುವುದು ಎಂದು ಬೆಸ್ಕಾಂ ಎಚ್ಚರಿಸಿದೆ.

ಈ ಸಂಗತಿಯ ಕುರಿತು ನಿಮ್ಮ ಅನಿಸಿಕೆ ಏನು? ಕಾಮೆಂಟ್ ಮೂಲಕ ತಿಳಿಸಿ

Continue Reading

ಕರ್ನಾಟಕ

Indecent Behaviour: ಮಹಿಳೆಯರಿಗೆ ಮರ್ಮಾಂಗ ತೋರಿಸಿ, ಅಸಭ್ಯ ವರ್ತನೆ; ಕಾಮುಕನಿಗೆ ಹಿಗ್ಗಾಮುಗ್ಗಾ ಬಾರಿಸಿದ ಜನ!

Indecent Behaviour: ಬಾಗಲಕೋಟೆ ಜಿಲ್ಲೆಯ ಇಳಕಲ್ ನಗರದ ಎಸ್‌ವಿಎಂ ಕಾಲೇಜು ಕ್ರೀಡಾಂಗಣದ ಬಳಿ ಘಟನೆ ನಡೆದಿದೆ. ಅಲ್ಲಿನ ಜನರು, ಆರೋಪಿಗೆ ಹಿಗ್ಗಾಮುಗ್ಗಾ ಬಾರಿಸಿ ಪೊಲೀಸರಿಗೆ ಒಪ್ಪಿಸಿದ್ದಾರೆ.

VISTARANEWS.COM


on

Bagalkot News
Koo

ಬಾಗಲಕೋಟೆ: ಮಹಿಳೆಯರಿಗೆ ಮರ್ಮಾಂಗ ತೋರಿಸಿ, ಅಸಭ್ಯ ವರ್ತನೆ (Indecent Behaviour) ತೋರುತ್ತಿದ್ದ ಕಾಮುಕನಿಗೆ ಸಾರ್ವಜನಿಕರು ಹಿಗ್ಗಾಮುಗ್ಗಾ ಬಾರಿಸಿರುವ ಘಟನೆ ಜಿಲ್ಲೆಯ ಇಳಕಲ್ ನಗರದ ಎಸ್‌ವಿಎಂ ಕಾಲೇಜು ಕ್ರೀಡಾಂಗಣದ ಬಳಿ ನಡೆದಿದೆ. ವಾಯು ವಿಹಾರಕ್ಕೆ ಬರುವ ಮಹಿಳೆಯರ ಎದುರು ಶರ್ಟ್ ಎತ್ತಿ ಮರ್ಮಾಂಗ ತೋರಿಸುತ್ತಿದ್ದ ಹಿನ್ನೆಲೆಯಲ್ಲಿ ಆರೋಪಿಗೆ ಸ್ಥಳೀಯರು ಧರ್ಮದೇಟು ನೀಡಿ ಪೊಲೀಸರಿಗೆ ಒಪ್ಪಿಸಿದ್ದಾರೆ.

ಇಳಕಲ್‌ ನಗರ ನಿವಾಸಿ ಬಸವರಾಜ್ ಎಂಬಾತನನ್ನು ಪೊಲೀಸರ ವಶಕ್ಕೆ ನೀಡಲಾಗಿದೆ. ಕಾಮುಕನ ನಡವಳಿಕೆಗೆ ಬೇಸತ್ತ ಮಹಿಳೆಯರು ಸ್ಥಳೀಯರಿಗೆ ಮಾಹಿತಿ ನೀಡಿದ್ದಾರೆ. ಹೀಗಾಗಿ ಆತನಿಗೆ ಸ್ಥಳೀಯ ಯುವಕರು ಹಿಗ್ಗಾಮುಗ್ಗಾ ಥಳಿಸಿದ್ದಾರೆ. ಬಳಿಕ ಸ್ಥಳಕ್ಕೆ ಇಳಕಲ್ ನಗರ ಠಾಣೆ ಪೊಲೀಸರು ಭೇಟಿ ಪರಿಶೀಲನೆ ನಡೆಸಿದ್ದು, ಕಾಮುಕ ಬಸವರಾಜನನ್ನು ಠಾಣೆಗೆ ಕರೆದೊಯ್ದಿದ್ದಾರೆ.

ಇದನ್ನೂ ಓದಿ | Renuka Swamy Murder Case: ರೇಣುಕಾಸ್ವಾಮಿ ಕೊಲೆಗೆ ಸಂಬಂಧಿಸಿದ 66 ವಸ್ತುಗಳು ಎಫ್ಎಸ್ಎಲ್‌ಗೆ ರವಾನೆ

ಇನ್ನು ಆರೋಪಿ ಬಸವರಾಜ್ ಮೊಬೈಲ್‌ನ ಸ್ಥಳೀಯರು ಪರಿಶೀಲಿಸಿದಾಗ ಗ್ಯಾಲರಿಯಲ್ಲಿ ಯುವತಿಯರ ಫೋಟೊಗಳು ಇರುವುದು ಕಂಡುಬಂದಿದೆ. ಗೂಗಲ್‌ ಸರ್ಚ್‌ ಹಿಸ್ಟರಿ ನೋಡಿದಾಗ, ಬಹುತೇಕ ಪೋರ್ನ್ ವೆಬ್‌ಸೈಟ್ ಲಿಂಕ್‌ಗಳು ಇರುವುದು ಕಂಡುಬಂದಿದೆ. ಹೀಗಾಗಿ ಆರೋಪಿಯನ್ನು ಸ್ಥಳೀಯರು ಥಳಿಸಿ, ಪೊಲೀಸರಿಗೆ ಒಪ್ಪಿಸಿದ್ದಾರೆ.

ಯಾದಗಿರಿಯಲ್ಲಿ ಹಸುಗೂಸನ್ನು ಬಾವಿಗೆ ಎಸೆದು ಕೊಂದರು ಹಂತಕರು

Murder case

ಯಾದಗಿರಿ: ಬಾವಿಗೆ ಎಸೆದು ಹಸುಗೂಸನ್ನು ಕೊಲೆ (Murder case) ಮಾಡಲಾಗಿದೆ. ಯಾದಗಿರಿ ನಗರದ ಅಂಬೇಡ್ಕರ್ ಬಡಾವಣೆಯಲ್ಲಿ ಅಮಾನವೀಯ ಘಟನೆ ನಡೆದಿದೆ. ಮೀನಾಕ್ಷಿ (2 ತಿಂಗಳು) ಮೃತ ದುರ್ದೈವಿ.

ನಾಗೇಶ್ ಹಾಗೂ ಚಿಟ್ಟೆಮ್ಮ ದಂಪತಿಯ ಮಗು ಮೀನಾಕ್ಷಿಯನ್ನು ಕೊಲೆ ಯಾರು ಮಾಡಿದ್ದಾರೆ? ಯಾಕೆ‌‌ ಮಾಡಿದ್ದಾರೆ ಎಂಬುದು ಗೊತ್ತಿಲ್ಲ. ಬಡಾವಣೆಯ ಹೊರ ಭಾಗದ ನಿರ್ಜನ ಪ್ರದೇಶದಲ್ಲಿರುವ ಬಾವಿಗೆ ಬಿಸಾಡಿ ಹೋಗಿದ್ದಾರೆ.

ಹೆಣ್ಣು ಮಗು ಎಂಬ ಕಾರಣಕ್ಕೆ ಕೊಲೆ ನಡೆದಿರುವ ಶಂಕೆ ವ್ಯಕ್ತವಾಗಿದೆ. ಸ್ಥಳದಲ್ಲಿ ಮಗುವಿನ ಪೋಷಕರು ಕಣ್ಣೀರು ಹಾಕುತ್ತಿದ್ದು, ಆಕ್ರಂದನ ಮುಗಿಲು ಮುಟ್ಟಿದೆ. ಸ್ಥಳಕ್ಕೆ ಯಾದಗಿರಿ ನಗರ ಠಾಣೆಯ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.

ಬಾವಿಯಲ್ಲಿದ್ದ ಮೃತದೇಹವನ್ನು ಮೇಲೆ ಎತ್ತಿದ್ದು ಮರಣೋತ್ತರ ಪರೀಕ್ಷೆಗಾಗಿ ಆಸ್ಪತ್ರೆಗೆ ಕಳುಹಿಸಲಾಗಿದೆ. ಯಾದಗಿರಿ ನಗರ ಠಾಣೆಯಲ್ಲಿ ಈ ಸಂಬಂಧ ಕೇಸ್ ದಾಖಲಾಗಿದ್ದು, ಪೊಲೀಸರು ತನಿಖೆಯನ್ನು ಕೈಗೊಂಡಿದ್ದಾರೆ.

ಬನ್ನೇರುಘಟ್ಟ ಸಫಾರಿ ವೇಳೆ ಸಿಬ್ಬಂದಿ ಮೇಲೆ ಕರಡಿ ದಾಳಿ

ಬೆಂಗಳೂರು ಗ್ರಾಮಾಂತರ: ಬನ್ನೇರುಘಟ್ಟ ಜೈವಿಕ ಉದ್ಯಾನವನದ ಸಫಾರಿ ವೇಳೆ ಕರಡಿಯೊಂದು (Bear Attack) ಸಿಬ್ಬಂದಿ ಮೇಲೆ ದಾಳಿ (Wild Animal Attack) ಮಾಡಿದೆ. ಬೆಂಗಳೂರು ಹೊರವಲಯ ಬನ್ನೇರುಘಟ್ಟ ಜೈವಿಕ ಉದ್ಯಾನವನದಲ್ಲಿ ಘಟನೆ ನಡೆದಿದೆ.ಬೆಟ್ಟಪ್ಪ (54) ಕರಡಿ ದಾಳಿಗೊಳಗಾದವರು.

ಇದನ್ನೂ ಓದಿ | Viral News: ಮದುವೆಯಾಗಲು ನಿರಾಕರಿಸಿದ ಪ್ರಿಯಕರನ ಆ ʼಅಂಗʼಕ್ಕೆ ಕತ್ತರಿ ಹಾಕಿದ ಪ್ರಿಯತಮೆ

ಬೆಟ್ಟಪ್ಪ ಕಳೆದ ಇಪ್ಪತ್ತು ವರ್ಷಗಳಿಂದ ಬನ್ನೇರುಘಟ್ಟದಲ್ಲಿ ಸಫಾರಿಯ ಗೇಟ್‌ ಆಪರೇಟರ್‌ ಕೆಲಸ ಮಾಡುತ್ತಿದ್ದಾರೆ. ಶನಿವಾರ ಸಫಾರಿಯಲ್ಲಿ ಗೇಟ್ ಆಪರೇಟ್ ಮಾಡುವಾಗ ಏಕಾಏಕಿ ಕರಡಿ ದಾಳಿ ಮಾಡಿದೆ. ಬೆಟ್ಟಪ್ಪ ಗಂಭೀರ ಗಾಯಗೊಂಡಿದ್ದು. ಅಪೋಲೋ ಆಸ್ಪತ್ರೆಗೆ ರವಾನೆ ಮಾಡಲಾಗಿದೆ. ಸಾವು ಬದುಕಿನ ನಡುವೆ ಬೆಟ್ಟಪ್ಪ ಹೋರಾಟ ನಡೆಸುತ್ತಿದ್ದಾರೆ.

Continue Reading

ಯಾದಗಿರಿ

Murder case : ಯಾದಗಿರಿಯಲ್ಲಿ ಹಸುಗೂಸನ್ನು ಬಾವಿಗೆ ಎಸೆದು ಕೊಂದರು ಹಂತಕರು

Murder case : ತಾಯಿ ಮಡಿಲಿನಲ್ಲಿ ಬೆಚ್ಚಗೆ ಮಲಗಬೇಕಿದ್ದ ಮಗುವೊಂದನ್ನು ಹಂತಕರು ಬಾವಿಗೆ ಎಸೆದು ಕೊಲೆ ಮಾಡಿದ್ದಾರೆ. ಬಾವಿಯೊಳಗೆ ಶವ ಪತ್ತೆಯಾಗಿದ್ದು, ಪೊಲೀಸರು ದೌಡಾಯಿಸಿದ್ದಾರೆ. ಈ ಕೃತ್ಯವೆಸಗಿದವರು ಯಾರು ಎಂಬುದು ತಿಳಿದು ಬಂದಿಲ್ಲ.

VISTARANEWS.COM


on

By

Murder case
Koo

ಯಾದಗಿರಿ: ಬಾವಿಗೆ ಎಸೆದು ಹಸುಗೂಸನ್ನು ಕೊಲೆ (Murder case) ಮಾಡಲಾಗಿದೆ. ಯಾದಗಿರಿ ನಗರದ ಅಂಬೇಡ್ಕರ್ ಬಡಾವಣೆಯಲ್ಲಿ ಅಮಾನವೀಯ ಘಟನೆ ನಡೆದಿದೆ. ಮೀನಾಕ್ಷಿ (2 ತಿಂಗಳು) ಮೃತ ದುರ್ದೈವಿ.

ನಾಗೇಶ್ ಹಾಗೂ ಚಿಟ್ಟೆಮ್ಮ ದಂಪತಿಯ ಮಗು ಮೀನಾಕ್ಷಿಯನ್ನು ಕೊಲೆ ಯಾರು ಮಾಡಿದ್ದಾರೆ? ಯಾಕೆ‌‌ ಮಾಡಿದ್ದಾರೆ ಎಂಬುದು ಗೊತ್ತಿಲ್ಲ. ಬಡಾವಣೆಯ ಹೊರ ಭಾಗದ ನಿರ್ಜನ ಪ್ರದೇಶದಲ್ಲಿರುವ ಬಾವಿಗೆ ಬಿಸಾಡಿ ಹೋಗಿದ್ದಾರೆ.

ಹೆಣ್ಣು ಮಗು ಎಂಬ ಕಾರಣಕ್ಕೆ ಕೊಲೆ ನಡೆದಿರುವ ಶಂಕೆ ವ್ಯಕ್ತವಾಗಿದೆ. ಸ್ಥಳದಲ್ಲಿ ಮಗುವಿನ ಪೋಷಕರು ಕಣ್ಣೀರು ಹಾಕುತ್ತಿದ್ದು, ಆಕ್ರಂದನ ಮುಗಿಲು ಮುಟ್ಟಿದೆ. ಸ್ಥಳಕ್ಕೆ ಯಾದಗಿರಿ ನಗರ ಠಾಣೆಯ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.

ಬಾವಿಯಲ್ಲಿದ್ದ ಮೃತದೇಹವನ್ನು ಮೇಲೆ ಎತ್ತಿದ್ದು ಮರಣೋತ್ತರ ಪರೀಕ್ಷೆಗಾಗಿ ಆಸ್ಪತ್ರೆಗೆ ಕಳುಹಿಸಲಾಗಿದೆ. ಯಾದಗಿರಿ ನಗರ ಠಾಣೆಯಲ್ಲಿ ಈ ಸಂಬಂಧ ಕೇಸ್ ದಾಖಲಾಗಿದ್ದು, ಪೊಲೀಸರು ತನಿಖೆಯನ್ನು ಕೈಗೊಂಡಿದ್ದಾರೆ.

ಇದನ್ನೂ ಓದಿ: Cow Smugglers: ಮಣ್ಣೆತ್ತಿನ ಅಮಾವಾಸ್ಯೆ ದಿನವೇ ಜಾನುವಾರುಗಳ ಪ್ರಾಣಹರಣಕ್ಕೆ ಸ್ಕೆಚ್‌!

ಮದುವೆಯಾಗಲು ನಿರಾಕರಿಸಿದ ಪ್ರಿಯಕರನ ಆ ʼಅಂಗʼಕ್ಕೆ ಕತ್ತರಿ ಹಾಕಿದ ಪ್ರಿಯತಮೆ

ಪಾಟ್ನಾ: ಪ್ರೀತಿಸಿ ಯುವತಿಯರನ್ನು ಬಳಸಿಕೊಂಡು ಮೋಸ ಮಾಡುವಂತಹ ಯುವಕರ ಸಂಖ್ಯೆ ಹೆಚ್ಚಾಗುತ್ತಿದೆ. ಯುವಕರ ಮೋಸದ ಪ್ರೀತಿಗೆ ಎಷ್ಟೋ ಯುವತಿಯರ ಜೀವನ ಹಾಳಾಗಿದೆ. ಹಾಗಾಗಿ ಇವರಲ್ಲಿ ಕೆಲವು ಯುವತಿಯರು ಮಾನ ಮರ್ಯಾದೆಗೆ ಅಂಜಿ ಜೀವ ಕಳೆದುಕೊಂಡಿದ್ದಾರೆ, ಆದರೆ ಇಲ್ಲೊಬ್ಬ ಯುವತಿ ಪ್ರೀತಿಸಿ (Viral News) ಮೋಸ ಮಾಡಿದವನಿಗೆ ತಕ್ಕ ಶಿಕ್ಷೆ ವಿಧಿಸಿದ್ದಾಳೆ.

ಬಿಹಾರದ ಸರನ್ ಜಿಲ್ಲೆಯಲ್ಲಿ ಮಹಿಳಾ ವೈದ್ಯೆಯೊಬ್ಬಳು ಪ್ರೀತಿಸಿ ತನ್ನ ಜೊತೆ ಸಂಬಂಧ ಬೆಳೆಸಿ ಮದುವೆಯಾಗಲು ನಿರಾಕರಿಸಿದ ಗೆಳೆಯನ ಖಾಸಗಿ ಭಾಗವನ್ನು ಕತ್ತರಿಸಿದ ಘಟನೆ ಜುಲೈ 1ರಂದು ನಡೆದಿದೆ. ಸಂತ್ರಸ್ತ ಪ್ರಕಾಶ್ ಅಲಿಯಾಸ್ ವಿಕಾಶ್ ಸಿಂಗ್ ಎಂದು ಗುರುತಿಸಲಾಗಿದ್ದು, ಈತ ಮಧೌರಾ ಬ್ಲಾಕ್‌ನ ವಾರ್ಡ್ ಸಂಖ್ಯೆ 12ರ ಕೌನ್ಸಿಲರ್ ಆಗಿದ್ದ ಎನ್ನಲಾಗಿದೆ. ಕಳೆದ ಐದು ವರ್ಷಗಳಿಂದ ಆತ ಯುವತಿಯೊಂದಿಗೆ ಸಂಬಂಧ ಹೊಂದಿದ್ದನು. ಆದರೆ ಅವನು ಅವಳನ್ನು ಮದುವೆಯಾಗಲು ನಿರಾಕರಿಸುತ್ತಿದ್ದನು. ತಾನು ಸಂಬಂಧ ಬೆಳೆಸಿದ ತಪ್ಪಿಗೆ ಯುವತಿ ಹೇಗೋ ನ್ಯಾಯಾಲಯದಲ್ಲಿ ಮದುವೆಯಾಗಲು ಅವನನ್ನು ಮನವೊಲಿಸಿದಳು. ಆದರೆ ಅಂದು ಆತ ಮದುವೆಯಾಗಲು ನ್ಯಾಯಾಲಯಕ್ಕೆ ಬರದೆ ತಪ್ಪಿಸಿಕೊಂಡ. ಇದರಿಂದ ಕೋಪಗೊಂಡ ಯುವತಿ ಆ ವ್ಯಕ್ತಿಯನ್ನು ತನ್ನ ಮನೆಗೆ ಕರೆಸಿಕೊಂಡು, ಅವನ ಖಾಸಗಿ ಭಾಗವನ್ನು ಕತ್ತರಿಸಿದ್ದಾಳೆ ಎನ್ನಲಾಗಿದೆ.

ಆತ ಅಳುವುದನ್ನು ಕೇಳಿದ ನೆರೆಹೊರೆಯವರು ಬಂದು ನೋಡಿದಾಗ ಆತ ರಕ್ತದ ಮಡುವಿನಲ್ಲಿ ಹಾಸಿಗೆಯ ಮೇಲೆ ಬಿದ್ದಿರುವುದನ್ನು ಕಂಡು ಸರನ್ ಜಿಲ್ಲೆಯ ಮಧೌರಾ ಠಾಣೆಯ ಪೊಲೀಸರಿಗೆ ಮಾಹಿತಿ ನೀಡಿದ್ದಾರೆ. ತಕ್ಷಣ ಸ್ಥಳಕ್ಕೆ ಬಂದ ಪೊಲೀಸರು ವ್ಯಕ್ತಿಯನ್ನು ಚಿಕಿತ್ಸೆಗಾಗಿ ಪಾಟ್ನಾ ವೈದ್ಯಕೀಯ ಕಾಲೇಜು ಮತ್ತು ಆಸ್ಪತ್ರೆಗೆ (ಪಿಎಂಸಿಎಚ್) ದಾಖಲಿಸಿದ್ದಾರೆ. ಆತನ ಸ್ಥಿತಿ ಚಿಂತಾಜನಕವಾಗಿದೆ ಎನ್ನಲಾಗಿದೆ.

ಹಾಗೇ ಕೊಲೆ ಯತ್ನದ ಸಂಬಂಧಿತ ವಿಭಾಗಗಳ ಅಡಿಯಲ್ಲಿ ಪೊಲೀಸರು ಯುವತಿಯನ್ನು ಬಂಧಿಸಿ, ತನಿಖೆ ನಡೆಸುತ್ತಿದ್ದಾರೆ. ಯುವತಿ ಹಾಜಿಪುರದ 25 ವರ್ಷದ ಅವಿವಾಹಿತ ವೈದ್ಯೆಯಾಗಿದ್ದು, ಮಧೌರಾದಲ್ಲಿ ವೈದ್ಯಕೀಯ ಶಿಕ್ಷಣ ಅಭ್ಯಾಸ ಮಾಡುತ್ತಿದ್ದಾಳೆ ಎಂದು ಪೊಲೀಸರು ತಿಳಿಸಿದ್ದಾರೆ. ವಿಚಾರಣೆ ವೇಳೆ ತಮ್ಮಿಬ್ಬರ ನಡುವೆ ಸಂಬಂಧವಿದ್ದು, ಆತ ಮದುವೆಯಾಗಲು ನಿರಾಕರಿಸಿದ್ದಕ್ಕೆ ಅವನ ಖಾಸಗಿ ಭಾಗ ಕತ್ತರಿಸಿರುವುದಾಗಿ ಯುವತಿ ಒಪ್ಪಿಕೊಂಡಿದ್ದಾಳೆ ಎಂಬುದಾಗಿ ತಿಳಿದುಬಂದಿದೆ.

ಈ ಸಂಗತಿಯ ಕುರಿತು ನಿಮ್ಮ ಅನಿಸಿಕೆ ಏನು? ಕಾಮೆಂಟ್ ಮೂಲಕ ತಿಳಿಸಿ

Continue Reading
Advertisement
Password Leak
ದೇಶ58 seconds ago

Password Leak: 995 ಕೋಟಿ ಪಾಸ್‌ವರ್ಡ್‌ಗಳು ಲೀಕ್;‌ ನಿಮ್ಮ ಪಾಸ್‌ವರ್ಡ್‌ ಕೂಡ ಕಳ್ಳತನ ಆಗಿದೆಯೇ?

CM Siddaramaiah
ಕರ್ನಾಟಕ5 mins ago

CM Siddaramaiah: ಪ್ರತಿ ಠಾಣೆಗೂ ತೆರಳಿ ಪರಿಶೀಲಿಸಬೇಕು: ಪೊಲೀಸ್‌ ಮೇಲಧಿಕಾರಿಗಳಿಗೆ ಸಿಎಂ ಖಡಕ್‌ ಸೂಚನೆ

Dolly dhananjay Halagali on set
ಸ್ಯಾಂಡಲ್ ವುಡ್12 mins ago

Dolly Dhananjay: ಐತಿಹಾಸಿಕ ‘ಹಲಗಲಿ’ ಸಿನಿಮಾದಲ್ಲಿ ‘ಡಾಲಿ’ ಧನಂಜಯ ಹೀರೊ!

Car price Discounts
ಪ್ರಮುಖ ಸುದ್ದಿ20 mins ago

Car price Discounts: ರಿನೊ ಕೈಗರ್, ಕ್ವಿಡ್, ಟ್ರೈಬರ್ ಕಾರುಗಳಿಗೆ 40,000 ರೂ. ತನಕ ರಿಯಾಯಿತಿ

Jasprit Bumrah
ಕ್ರೀಡೆ30 mins ago

Jasprit Bumrah: ಟಿ20 ನಿವೃತ್ತಿ ಬಗ್ಗೆ ಸ್ಪಷ್ಟನೆ ಕೊಟ್ಟ ಜಸ್​ಪ್ರೀತ್​ ಬುಮ್ರಾ

Bescom Order
ಬೆಂಗಳೂರು32 mins ago

BESCOM Order : ವಿದ್ಯುತ್‌ ಕಂಬಗಳ ಮೇಲೆ ಅನಧಿಕೃತ ಕೇಬಲ್‌ ತೆರವಿಗೆ ಗಡುವು; ಬಿಸಿ ಮುಟ್ಟಿಸಲು ಸಜ್ಜಾದ ಬೆಸ್ಕಾಂ

Kiccha Sudeep workout For next Movie
ಸ್ಯಾಂಡಲ್ ವುಡ್52 mins ago

Kiccha Sudeep: ಮುಂದಿನ ಸಿನಿಮಾಗಾಗಿ ಭಾರಿ ವರ್ಕೌಟ್‌ ಮಾಡ್ತಾ ಇದ್ದಾರೆ ಕಿಚ್ಚ!

Hathras Stampede
ದೇಶ1 hour ago

Hathras Stampede: ಹತ್ರಾಸ್‌ ಕಾಲ್ತುಳಿತ- ಭೋಲೆ ಬಾಬಾನ ವಿರುದ್ಧ ಮೊದಲ ಕೇಸ್‌ ದಾಖಲು

Maruti Brezza Urbano
ಪ್ರಮುಖ ಸುದ್ದಿ1 hour ago

Maruti Brezza Urbano : ಬ್ರೆಜಾ ಎಸ್​​ಯುವಿಯಲ್ಲಿ ಹೊಸ ವೇರಿಯೆಂಟ್ ಬಿಡುಗಡೆ ಮಾಡಿದ ಮಾರುತಿ ಸುಜುಕಿ

Money Guide
ಮನಿ-ಗೈಡ್1 hour ago

Money Guide: ಹಿರಿಯ ನಾಗರಿಕರು ಮಾಸಿಕ 20,000 ರೂ. ಆದಾಯ ಗಳಿಸಲು ಈ ಯೋಜನೆಯಲ್ಲಿ ಹೂಡಿಕೆ ಮಾಡಿ

Sharmitha Gowda in bikini
ಕಿರುತೆರೆ9 months ago

Geetha Serial Kannada: ನಿದ್ದೆ ಕದ್ದ ಚೋರಿ! ನಟಿ `ಭಾನುಮತಿ’ ಹಾಟ್‌ ಪೋಟೊಗಳಿಗೆ ಫ್ಯಾನ್ಸ್ ಫುಲ್ ಫಿದಾ

Kannada Serials
ಕಿರುತೆರೆ9 months ago

Kannada Serials TRP: 2ನೇ ಸ್ಥಾನದಲ್ಲಿ 2 ಧಾರಾವಾಹಿಗಳು; ಟಿಆರ್‌ಪಿ ರೇಸ್‌ನಲ್ಲಿಲ್ಲ ಭಾಗ್ಯಲಕ್ಷ್ಮೀ!

Bigg Boss- Saregamapa 20 average TRP
ಕಿರುತೆರೆ9 months ago

Kannada Serials TRP: ಏಳನೇ ಸ್ಥಾನಕ್ಕೆ ʻಅಮೃತಧಾರೆʼ ಕುಸಿತ; ಬಿಗ್‌ ಬಾಸ್‌-ಸರಿಗಮಪ ಟಿಆರ್‌ಪಿ ಎಷ್ಟು?

galipata neetu
ಕಿರುತೆರೆ7 months ago

Kanyadana Serial: ಕಿರುತೆರೆಗೆ ಮತ್ತೆ ಎಂಟ್ರಿ ಕೊಟ್ಟ ʻಗಾಳಿಪಟʼ ಖ್ಯಾತಿಯ ʻನೀತುʼ!

Kannada Serials
ಕಿರುತೆರೆ9 months ago

Kannada Serials TRP: ನಾಲ್ಕನೇ ಸ್ಥಾನಕ್ಕೆ ಕುಸಿತ ಕಂಡ ʻಸೀತಾ ರಾಮʼ; ಟಿಆರ್‌ಪಿ ರೇಸ್‌ಗೆ ʻಭಾಗ್ಯಲಕ್ಷ್ಮಿʼ ಬ್ಯಾಕ್‌!

Kannada Serials
ಕಿರುತೆರೆ9 months ago

Kannada Serials TRP: ಟಿಆರ್‌ಪಿಯಲ್ಲಿ ʻಭಾಗ್ಯಲಕ್ಷ್ಮೀʼ ಹವಾ; ʻಪುಟ್ಟಕ್ಕನ ಮಕ್ಕಳುʼ ಧಾರಾವಾಹಿಗೆ ಸಂಕಷ್ಟ!

Bigg Boss' dominates TRP; Sita Rama fell to the sixth position
ಕಿರುತೆರೆ8 months ago

Kannada Serials TRP: ಟಿಆರ್‌ಪಿಯಲ್ಲಿ ʻಬಿಗ್ ಬಾಸ್ʼದೇ ಮೇಲುಗೈ; 6ನೇ ಸ್ಥಾನಕ್ಕೆ ಕುಸಿದ ʻಸೀತಾ ರಾಮʼ

geetha serial Dhanush gowda engagement
ಕಿರುತೆರೆ7 months ago

Dhanush Gowda: ಗೀತಾ ಧಾರಾವಾಹಿ ನಟನ ನಿಶ್ಚಿತಾರ್ಥ; ಭವ್ಯಾಳ ಕಮೆಂಟ್‌ ಬಾಕ್ಸ್‌ ಆಫ್‌!

varun
ಕಿರುತೆರೆ8 months ago

Brindavana Serial: ʼಬೃಂದಾವನʼ ಧಾರಾವಾಹಿಯಲ್ಲಿ ದೊಡ್ಡ ಟ್ವಿಸ್ಟ್‌; ಪ್ರಮುಖ ಪಾತ್ರಧಾರಿಯೇ ಬದಲು

Kannada Serials
ಕಿರುತೆರೆ10 months ago

Kannada Serials TRP: ಟಿಆರ್‌ಪಿಯಲ್ಲಿ ಏರಿಕೆ ಕಂಡ ʻಅಮೃತಧಾರೆʼ; ʻಗಟ್ಟಿಮೇಳʼಕ್ಕೆ ನಾಲ್ಕನೇ ಸ್ಥಾನ!

karnataka Rain
ಮಳೆ2 hours ago

Karnataka Rain : ಭಾರಿ ಗಾಳಿ- ಮಳೆಗೆ ಹಾರಿದ ಅಂಗಡಿಯ ತಗಡು; ಮಾಗುಂಡಿ-ಬಾಳೆಹೊನ್ನೂರು ಮಾರ್ಗ ಬಂದ್

Food Poisoning
ರಾಯಚೂರು5 hours ago

Food Poisoning : ಮೊರಾರ್ಜಿ ವಸತಿ ಶಾಲೆ ಅವ್ಯವಸ್ಥೆ; ಊಟ ಸೇವಿಸಿದ 25ಕ್ಕೂ ಹೆಚ್ಚು ವಿದ್ಯಾರ್ಥಿಗಳು ಅಸ್ವಸ್ಥ

Wild Animal Attack Elephant attack
ರಾಮನಗರ6 hours ago

Wild Animal Attack : ತೋಟದಲ್ಲಿ ನೀರು ಹಾಯಿಸುತ್ತಿದ್ದವನ ತುಳಿದು ಸಾಯಿಸಿದ ಆನೆ

karnataka Weather Forecast
ಮಳೆ11 hours ago

Karnataka Weather : ಕರಾವಳಿ, ಮಲೆನಾಡಿನಲ್ಲಿ ಇಂದು ನಾನ್‌ ಸ್ಟಾಪ್‌ ಮಳೆ; ಬೆಂಗಳೂರಲ್ಲಿ ಹೇಗೆ?

karnataka Weather Forecast
ಮಳೆ23 hours ago

Karnataka Weather: ಧಾರಾಕಾರ ಮಳೆಗೆ ಜನರ ಒದ್ದಾಟ- ಸೇತುವೆಗಳು ಮುಳುಗಿ ಪರದಾಟ; ಶಾಲಾ-ಕಾಲೇಜುಗಳಿಗೆ ರಜೆ

Lovers Fighting
ಚಿಕ್ಕಬಳ್ಳಾಪುರ1 day ago

Lovers Fighting: ಪ್ರೀತಿಸಿ ಕೈಕೊಟ್ಟವನಿಗೆ ನಡುರಸ್ತೆಯಲ್ಲೇ ಚಳಿ ಬಿಡಿಸಿದ ಗರ್ಭಿಣಿ

Medical negligence
ದಾವಣಗೆರೆ1 day ago

Medical negligence: ಸಿಸೇರಿಯನ್ ಮಾಡುವಾಗ ಶಿಶುವಿನ ಮರ್ಮಾಂಗವನ್ನೇ ಕತ್ತರಿಸಿ ಸಾಯಿಸಿದ ವೈದ್ಯ!

karnataka rain
ಮಳೆ1 day ago

Karnataka Rain: ಮಳೆಗೆ ಮನೆಗಳಿಗೆ ನುಗ್ಗುತ್ತಿವೆ ಹಾವುಗಳು! ಕುಸಿದು ಬಿತ್ತು ಮನೆಗಳು

Elephant attack in Hassan and Chikmagalur
ಹಾಸನ1 day ago

Elephant Attack : ಕಾಫಿ ತೋಟದ‌ ಕೆಲಸಗಾರನನ್ನು ಸೊಂಡಿಲಿನಿಂದ ಎತ್ತಿ ಬಿಸಾಡಿದ ಒಂಟಿ ಸಲಗ

Physical Abuse
ಬೆಂಗಳೂರು1 day ago

Physical Abuse : ಇವಳೇನು ಶಿಕ್ಷಕಿಯೋ ಕಾಮುಕಿಯೋ; ಬಾಲಕಿಯ ಖಾಸಗಿ ಅಂಗಾಂಗ ಮುಟ್ಟಿ ವಿಕೃತಿ

ಟ್ರೆಂಡಿಂಗ್‌