Jerusha Christopher: ʻವೀರ ಮದಕರಿʼಯಲ್ಲಿ ಸುದೀಪ್‌ ಮಗಳಾಗಿ ನಟಿಸಿದ್ದ ಈ ಹುಡುಗಿ ಈಗ ನಾಯಕಿ! - Vistara News

South Cinema

Jerusha Christopher: ʻವೀರ ಮದಕರಿʼಯಲ್ಲಿ ಸುದೀಪ್‌ ಮಗಳಾಗಿ ನಟಿಸಿದ್ದ ಈ ಹುಡುಗಿ ಈಗ ನಾಯಕಿ!

Jerusha Christopher: ಈ ಸಿನಿಮಾದಲ್ಲಿ ಸುದೀಪ್ ಮಗಳ ಪಾತ್ರದಲ್ಲಿ ಜೆರುಶಾ ಕ್ರಿಸ್ಟೋಫರ್ (Jerusha Christopher) ಕಾಣಿಸಿಕೊಂಡಿದ್ದರು. ಈಗ ಅವರು ನಾಯಕಿ ಆಗಿ ಮಿಂಚುತ್ತಿದ್ದಾರೆ.

VISTARANEWS.COM


on

Jerusha Christopher
ಮಹತ್ವದ, ಕುತೂಹಲಕರ ಸುದ್ದಿಗಾಗಿ ಫಾಲೊ ಮಾಡಿ
Koo

ಬೆಂಗಳೂರು: ಅಭಿನಯ ಚಕ್ರವರ್ತಿ ಕಿಚ್ಚ ಸುದೀಪ್‌ ಅಭಿನಯದ ವೀರ ಮದಕರಿ ಸಿನಿಮಾ (veera madakari) 2009ರಲ್ಲಿ ತೆರೆ ಕಂಡು ಹಿಟ್‌ ಕಂಡಿತ್ತು. ವೀರ ಮದಕರಿ ಸಿನಿಮಾ ರಾಜಮೌಳಿ (SS Rajamouli) ಅವರ ತೆಲುಗುವಿನ `ವಿಕ್ರಮಾರ್ಕುಡು’ (vikramarkudu) ರಿಮೇಕ್ ಆಗಿತ್ತು. ಆದರೆ ಕಿಚ್ಚನ ಅದ್ಭುತ ನಿರ್ದೇಶನದಲ್ಲಿ ಎಲ್ಲೂ ಇದು ರಿಮೇಕ್ ಸಿನಿಮಾ ಅನಿಸಲೇ ಇಲ್ಲ. ಅಪ್ಟಟ ಕನ್ನಡ ಸಿನಿಮಾನೇ ಆಗಿ ಬಿಟ್ಟಿತ್ತು. ವಿಶೇಷವಾಗಿ ತುಪ್ಪದ ಬೆಡಗಿ ರಾಗಿಣಿ ದ್ವಿವೇದಿ (Ragini Dwivedi) ಈ ಚಿತ್ರದ ಮೂಲಕವೇ ಕನ್ನಡ ಚಿತ್ರರಂಗಕ್ಕೆ ಎಂಟ್ರಿ ಕೊಟ್ಟರು. ಎಂ. ಎಂ. ಕೀರವಾಣಿ ಸಂಗೀತದ ಹಾಡುಗಳೂ ಜನಕ್ಕೆ ಇಷ್ಟ ಆದವು. ನಿರ್ಮಾಪಕ ದಿನೇಶ್ ಗಾಂಧಿ ದುಡ್ಡು ಹಾಕಿದ್ದ ಈ ಚಿತ್ರದ ಬಾಕ್ಸ್ ಆಫೀಸ್‌ನಲ್ಲಿ ಭಾರೀ ಸದ್ದು ಮಾಡಿತ್ತು. ಈ ಸಿನಿಮಾದಲ್ಲಿ ಸುದೀಪ್ ಮಗಳ ಪಾತ್ರದಲ್ಲಿ ಜೆರುಶಾ ಕ್ರಿಸ್ಟೋಫರ್ (Jerusha Christopher) ಕಾಣಿಸಿಕೊಂಡಿದ್ದರು. ಈಗ ಅವರು ನಾಯಕಿ ಆಗಿ ಮಿಂಚುತ್ತಿದ್ದಾರೆ. ಅವರು ನೀಡಿದ ಸಂದರ್ಶನದ ಕ್ಲಿಪ್ ಒಂದು ವೈರಲ್ ಆಗಿದೆ. ಈ ನಟಿ ‘ಧೂಮಂ’ ಸಿನಿಮಾದಲ್ಲಿ ನಟಿಸಿದ್ದಾರೆ ಎಂದರೆ ನಂಬಲೇ ಬೇಕು.

ಜೆರುಶಾ ಬೆಂಗಳೂರಿನವರೇ. ಪವನ್ ಕುಮಾರ್ ನಿರ್ದೇಶನದ, ಫಹಾದ್ ಫಾಸಿಲ್ ನಟನೆಯ ‘ಧೂಮಂ’ ಸಿನಿಮಾದಲ್ಲಿ ನಟಿಸಿದ್ದಾರೆ. ಅವರು ಸುದೀಪ್ ಮಗಳ ಪಾತ್ರ ಮಾಡಿದ್ದರು ಎನ್ನುವ ವಿಚಾರ ಇತ್ತೀಚೆಗೆ ರಿವೀಲ್ ಆಗಿದೆ. ಸಂದರ್ಶನ ಒಂದರಲ್ಲಿ ಈ ವಿಚಾರ ಹೇಳಿಕೊಂಡಿದ್ದಾರೆ. ಈ ವಿಡಿಯೊ ವೈರಲ್ ಆಗುತ್ತಿದೆ.

‘ನಾನು ಕನ್ನಡದ ವೀರ ಮದಕರಿ ಸಿನಿಮಾದಲ್ಲಿ ನಟಿಸಿದ್ದೆ. ಈ ಚಿತ್ರದಲ್ಲಿ ಸುದೀಪ್ ಮಗಳ ಪಾತ್ರ ಮಾಡಿದ್ದೆ’ ಎಂದು ಜೆರುಶಾ ಹೇಳಿಕೊಂಡಿದ್ದಾರೆ.

ಇದನ್ನೂ ಓದಿ: Spandana Vijay Raghavendra: ಸ್ಯಾಂಡಲ್‌ವುಡ್‌ ಸಾವಿನ ಸರಣಿಗೆ ಸ್ಪಂದನಾ ಸೇರ್ಪಡೆ; ಅಗಲಿದ ಯುವಜೀವಗಳು

ಜೆರುಶಾ ಅವರು 50ಕ್ಕೂ ಹೆಚ್ಚು ಜಾಹೀರಾತುಗಳಲ್ಲಿ ನಟಿಸಿದ್ದಾರೆ. ‘ನಾನು ಏನು ಮಾಡುತ್ತೇನೋ ಅದಕ್ಕೆ ನನ್ನ ತಂದೆ-ತಾಯಿ ಬೆಂಬಲವಾಗಿ ನಿಂತಿದ್ದಾರೆ. ಅವರು ನನ್ನ ಆಧಾರಸ್ತಂಭ’ ಎಂದು ಜೆರುಶಾ ಸಂತೋಷ ಹೊರಹಾಕಿದ್ದಾರೆ. ಈ ವಿಡಿಯೊ ವೈರಲ್‌ ಆಗುತ್ತಿದ್ದ ಹಾಗೇ ‘ಸುದೀಪ್ ಮಗಳ ಪಾತ್ರದಲ್ಲಿ ಜೆರುಶಾ ಕಾಣಿಸಿಕೊಂಡಿದ್ದರು. ಈಗ ಸುದೀಪ್​ಗೆ ನಾಯಕಿ ಆಗಿ ಅವರು ಕಾಣಿಸಿಕೊಳ್ಳಬಹುದು. ಅಷ್ಟು ಸುಂದರವಾಗಿ ಬೆಳೆದಿದ್ದಾರೆ’ ಎಂದು ಅನೇಕರು ಕಮೆಂಟ್ ಮಾಡುತ್ತಿದ್ದಾರೆ.

‘ಕಿಚ್ಚ 46’

ಕಿಚ್ಚ 46 ಸಿನಿಮಾವನ್ನು ತಮಿಳು ನಿರ್ಮಾಪಕ ಕಲೈಪುಲಿ ಎಸ್‌ ಧಾನು ಇತ್ತೀಚೆಗೆ ಘೋಷಿಸಿದ್ದರು. ಸಿನಿಮಾದ ಟೀಸರ್‌ (Kiccha 46 Teaser) ಬಿಡುಗಡೆಗೊಂಡಿದೆ. ಗಾಗಲೇ ಕಿಚ್ಚನ ಕೈಯಲ್ಲಿ ಮೂರು ಸಿನಿಮಾಗಳಿವೆ. ವರದಿ ಪ್ರಕಾರ ಮೊದಲು ಸಿನಿಮಾವಾಗಿ ‘ಬಿಲ್ಲ ರಂಗ ಬಾಷಾ’ (Billa Ranga Basha) ಮೂಡಿ ಬರಲಿದೆ. ಈ ಸಿನಿಮಾಗೆ ಅನೂಪ್ ಭಂಡಾರಿ ನಿರ್ದೇಶನ ಮಾಡಲಿದ್ದು, ವಿಕ್ರಾಂತ್ ರೋಣದ ನಂತರ ಈ ಜೋಡಿ ಮತ್ತೆ ಒಂದಾಗುತ್ತಿದೆ ಎನ್ನಲಾಗಿದೆ. ಭಾರಿ ಬಜೆಟ್ ಚಿತ್ರ ಇದಾಗಿದ್ದು, ಕನ್ನಡ ಮತ್ತು ತಮಿಳಿನಲ್ಲಿ ಈ ಸಿನಿಮಾ ಏಕಕಾಲಕ್ಕೆ ರೆಡಿಯಾಗಲಿದೆ. ಅರ್ಜುನ್ ಜನ್ಯ ಬದಲಾಗಿ ಈ ಚಿತ್ರಕ್ಕೆ ಹ್ಯಾರೀಸ್ ಜೈರಾಜ್ ಎನ್ನುವವರು ಸಂಗೀತ ಸಂಯೋಜನೆ ಮಾಡಲಿದ್ದಾರೆ.

ಕ್ಷಣ ಕ್ಷಣದ ಮಾಹಿತಿಗಾಗಿ Vistara News FaceBook ಪೇಜ್ ಫಾಲೋ ಮಾಡಿ
ಮಹತ್ವದ ಮಾಹಿತಿಗಾಗಿ ವಿಸ್ತಾರ ನ್ಯೂಸ್ ಆ್ಯಪ್ ಉಚಿತವಾಗಿ ಡೌನ್ ಲೋಡ್ ಮಾಡಿಕೊಳ್ಳಿ: Andriod App | IOS App
Continue Reading
Click to comment

Leave a Reply

Your email address will not be published. Required fields are marked *

Latest

Akira Nandan: ಅಕಿರಾ ನಂದನ್‌; ಆರೂವರೆ ಅಡಿ ಎತ್ತರದ ಪವನ್ ಕಲ್ಯಾಣ್ ಪುತ್ರನಿಗೆ ಭಾರಿ ಡಿಮ್ಯಾಂಡ್‌!

Akira Nandan: ಪವನ್ ಕಲ್ಯಾಣ್ ಪುತ್ರ ಅಕಿರಾ ನಂದನ್ ಇಂಟರ್ನೆಟ್ ನಲ್ಲಿ ಭಾರೀ ಸಂಚಲನ ಮೂಡಿಸಿದ್ದಾನೆ. ಅಕಿರಾ ನಂದನ್ ಯಾರು ಎನ್ನುವುದರ ಕುರಿತು ಜನರು ಸಿಕ್ಕಾಪಟ್ಟೆ ಹುಡುಕುತ್ತಿದ್ದಾರೆ. ಪವನ್ ಕಲ್ಯಾಣ್ ಹಾಗೂ ರೇಣು ದೇಸಾಯಿ ಪುತ್ರನಾದ ಅಕಿರಾ ನಂದನ್‌ಗೆ ಕ್ರಿಕೆಟ್, ಡ್ಯಾನ್ಸ್ ಬಗ್ಗೆ ವಿಪರೀತವಾದ ಒಲವಿದೆಯಂತೆ. ಹಾಗೇ ಪಿಯಾನೋ ಕೂಡ ಇವನ ಇಷ್ಟದ ಪಟ್ಟಿಯಲ್ಲಿದೆ. ವಿಧಾನ ಸಭಾ ಚುನಾವಣೆಯಲ್ಲಿ ಗೆಲುವಿನ ನಗೆ ಬೀರಿದ ಪವನ್ ಕಲ್ಯಾಣ್ ತಮ್ಮ ಮಗ ಅಕಿರಾ ನಂದನ್ ಹಾಗೂ ತನ್ನ ಮೂರನೇ ಪತ್ನಿ ಅನ್ನಾ ಲೆಜ್ನೋವಾ ಅವರೊಂದಿಗೆ ಪ್ರಧಾನಿ ಮೋದಿ ಅವರನ್ನು ಭೇಟಿ ಮಾಡಿದ್ದಾರೆ.

VISTARANEWS.COM


on

Pawan Kalyan
Koo

ಹೈದರಾಬಾದ್ : ಖ್ಯಾತ ಟಾಲಿವುಡ್ ನಟ ಪವನ್ ಕಲ್ಯಾಣ್ (Akira Nandan) ಅವರು ಸಿನಿಮಾ ರಂಗದಲ್ಲಿ ಹೆಸರು ಮಾಡಿ ನಂತರ ರಾಜಕೀಯಕ್ಕೆ ಕಾಲಿಟ್ಟಿದ್ದಾರೆ. ಇದೀಗ ಅವರು 2024ರ ವಿಧಾನಸಭೆ ಚುನಾವಣೆಯಲ್ಲಿ ಗೆದ್ದು ತಮ್ಮ ಆಡಳಿತವನ್ನು ಕೈಗೆ ತೆಗೆದುಕೊಂಡಿದ್ದಾರೆ. ಚುನಾವಣೆಯ ನಂತರ ಅವರು ತಮ್ಮ ಹಿರಿಯ ಪುತ್ರ ಅಕಿರಾ ನಂದನ್ ಜೊತೆ ಪ್ರಧಾನಿ ನರೇಂದ್ರ ಮೋದಿಯವರನ್ನು ಭೇಟಿ ಮಾಡಿದ್ದಾರೆ. ಹಾಗಾಗಿ ಇದೀಗ ಅಕಿರಾ ನಂದನ್ ಇಂಟರ್‌ನೆಟ್ ನಲ್ಲಿ ಭಾರೀ ಸಂಚಲನ ಮೂಡಿಸಿದ್ದಾನೆ. ಅವನು ಯಾರು ಎನ್ನುವುದರ ಬಗ್ಗೆ ಜನರು ಹುಡುಕಾಟ ಮಾಡುತ್ತಿದ್ದಾರೆ, ಹಾಗಾಗಿ ಅಕಿರಾ ನಂದನ್ ಬಗ್ಗೆ ಇಲ್ಲಿದೆ ಮಾಹಿತಿ.

ಅಕಿರಾ ನಂದನ್, ಪವನ್ ಕಲ್ಯಾಣ್ ಅವರ ಮೊದಲ ಪುತ್ರ. ಅಕಿರಾ ನಂದನ್ ಏಪ್ರಿಲ್ 8, 2004ರಲ್ಲಿ ಪವನ್ ಕಲ್ಯಾಣ್ ಮತ್ತು ಅವರ ಮಾಜಿ ಪತ್ನಿ ರೇಣು ದೇಸಾಯಿ ದಂಪತಿಯ ಪುತ್ರನಾಗಿ ಜನಿಸಿದ್ದ. ಅವನಿಗೆ ಆಧ್ಯಾ ಕೊನಿಡೆಲಾ ಎಂಬ ತಂಗಿಯೂ ಇದ್ದಾಳೆ. ಇನ್ನು ಅಕಿರಾ ನಂದನ್ ಬಣ್ಣದ ಲೋಕದಲ್ಲೂ ಕಾಣಿಸಿಕೊಂಡಿದ್ದಾನೆ. ತನ್ನ ತಾಯಿ ನಿರ್ದೇಶನದ ‘ಇಷ್ಕ್ ವಾಲಾ ಲವ್’ (2014) ಚಿತ್ರದಲ್ಲಿ ನಟಿಸಿದ್ದ. ಆತ ನಟನೆಯಲ್ಲಿ ಮುಂದುವರಿಯುತ್ತಾನೆ ಎಂಬ ಊಹಾಪೋಹಗಳು ಕೇಳಿ ಬಂದ ಕಾರಣ ತಾಯಿ ರೇಣು ದೇಸಾಯಿ ತಮ್ಮ ಮಗನಿಗೆ ಈಗ ನಟನೆಯಲ್ಲಿ ಆಸಕ್ತಿ ಇಲ್ಲ ಎಂದು ತಿಳಿಸಿದ್ದಾರೆ.

ಅಕಿರಾಗೆ ಕ್ರಿಕೆಟ್‌, ಡ್ಯಾನ್ಸ್ ಬಗ್ಗೆ ವಿಪರೀತವಾದ ಒಲವಿದೆಯಂತೆ. ಹಾಗೆಯೇ ಪಿಯಾನೋ ಕೂಡ ಇವನ ಇಷ್ಟದ ಪಟ್ಟಿಯಲ್ಲಿದೆ. ಹಾಗಾಗಿ ಅಕಿರಾ ಮುಂದೆ ಯಾವುದರಲ್ಲಿ ತನ್ನನ್ನು ತೊಡಗಿಸಿಕೊಳ್ಳುತ್ತಾನೆ ಎಂಬುದನ್ನು ನೋಡಬೇಕಿದೆ.
ಅಕಿರಾ ನಂದನ್ ಆಗಾಗ ತಂದೆ ಪವನ್ ಕಲ್ಯಾಣ ಜೊತೆ ಸಾರ್ವಜನಿಕವಾಗಿ ಕಾಣಿಸಿಕೊಳ್ಳುತ್ತಿದ್ದು, ವಿಧಾನ ಸಭಾ ಚುನಾವಣೆಯಲ್ಲಿ ಪವನ್ ಕಲ್ಯಾಣ್ ಅವರ ಐತಿಹಾಸಿಕ ಗೆಲುವಿನ ನಂತರ ಅವರು ತಮ್ಮ ಮಗ ಅಕಿರಾ ನಂದನ್ ಹಾಗೂ ತನ್ನ ಮೂರನೇ ಪತ್ನಿ ಅನ್ನಾ ಲೆಜ್ನೋವಾ ಅವರೊಂದಿಗೆ ಪ್ರಧಾನಿ ಮೋದಿ ಅವರನ್ನು ಭೇಟಿ ಮಾಡಲು ಇತ್ತೀಚೆಗೆ ನವದೆಹಲಿಗೆ ತೆರಳಿದ್ದರು. ಅಂದ ಹಾಗೆ ಅಕಿರಾ ನಂದನ್‌ 6 ಅಡಿ 4 ಇಂಚು ಎತ್ತರ ಇದ್ದಾನೆ.

ಇದನ್ನೂ ಓದಿ: Baby Death: ಆಟವಾಡುತ್ತ 7ನೇ ಮಹಡಿ ಬಾಲ್ಕನಿಯಿಂದ ಕೆಳಗೆ ಬಿದ್ದ ಮಗು; ವಿಡಿಯೊ ಇದೆ

ಪವನ್ ಕಲ್ಯಾಣ್ ಅವರ ಮಾಜಿ ಪತ್ನಿ, ಅಕಿರಾ ನಂದನ್ ತಾಯಿ ರೇಣು ದೇಸಾಯಿ ಇತ್ತೀಚೆಗೆ ತಮ್ಮ ಎರಡನೇ ಮದುವೆ ಬಗ್ಗೆ ಪ್ರಸ್ತಾಪ ಮಾಡಿದ್ದರು. ತಾವು ಎರಡನೇ ಮದುವೆಯಾಗುವ ಬಗ್ಗೆ ಸಂದರ್ಶನವೊಂದರಲ್ಲಿ ಸ್ಪಷ್ಟನೆ ನೀಡಿದ್ದರು. ಇಷ್ಟು ವರ್ಷಗಳ ಕಾಲ ಮಕ್ಕಳ ಆರೈಕೆಗಾಗಿ ಮದುವೆಯಾಗಿಲ್ಲ. ಈಗ ಮಕ್ಕಳು ಬೆಳೆದು ದೊಡ್ಡವರಾದ ಕಾರಣ ತಾನು ಎರಡನೇ ಮದುವೆ ಮಾಡಿಕೊಳ್ಳುವುದಾಗಿ ಬಹಿರಂಗಪಡಿಸಿದ್ದರು. ಇದಕ್ಕೆ ತಮ್ಮ ಮಕ್ಕಳ ಒಪ್ಪಿಗೆ ಕೂಡ ಇದೆ ಎಂಬುದಾಗಿ ತಿಳಿಸಿದ್ದರು.

Continue Reading

ಸ್ಯಾಂಡಲ್ ವುಡ್

Samarjit Lankesh: ʻಗೌರಿʼ ಚಿತ್ರದ ಹುಬ್ಬಳ್ಳಿ ಜವಾರಿ ಶೈಲಿಯ `ಧೂಳ್ ಎಬ್ಬಿಸಾವ’ ಸಾಂಗ್ ರಿಲೀಸ್!

Samarjit Lankesh: ಇಂದ್ರಜಿತ್​ ಲಂಕೇಶ್ (Indrajit Lankesh)​ ಅವರ ಪುತ್ರ ಸಮರ್ಜಿತ್​ ಲಂಕೇಶ್​ (Samarjit Lankesh) ಅವರು ಹೀರೊ ಆಗಿ ಚಿತ್ರರಂಗಕ್ಕೆ ಕಾಲಿಡುತ್ತಿದ್ದಾರೆ. ಇಂದ್ರಜಿತ್‌ ಲಂಕೇಶ್ ಅವರು ತಮ್ಮ ಮಗನ ಮೊದಲ ಸಿನಿಮಾಕ್ಕೆ ‘ಗೌರಿ’ ಎಂದು ಟೈಟಲ್ ಇಟ್ಟಿದ್ದಾರೆ. ಈ ಚಿತ್ರಕ್ಕೆ ‘ಗೌರಿ’ ಎನ್ನುವ ಶೀರ್ಷಿಕೆ ಇಟ್ಟಿದ್ದು ಏಕೆ ಎನ್ನುವ ಪ್ರಶ್ನೆಗೆ ಇಂದ್ರಜಿತ್ ಅವರು ಈ ಹಿಂದೆ ಉತ್ತರ ನೀಡಿದ್ದರು.ನನ್ನ ಅಕ್ಕನ ಮೇಲಿ ಪ್ರೀತಿ ಹಾಗೂ ಅಭಿಮಾನಕ್ಕಾಗಿ ಗೌರಿ ಎನ್ನುವ ಶೀರ್ಷಿಕೆ ಇಟ್ಟಿದ್ದೇನೆʼʼಎಂದಿದ್ದರು.

VISTARANEWS.COM


on

Samarjit Lankesh Dhool Yebsava Video Song Out
Koo

ಬೆಂಗಳೂರು: ಇಂದ್ರಜಿತ್ ಲಂಕೇಶ್ ನಿರ್ದೇಶನ, ನಾಯಕ ನಟ ಸಮರ್ಜಿತ್ ಲಂಕೇಶ್ (Samarjit Lankesh) ಹಾಗೂ ಸಾನ್ಯ ಅಯ್ಯರ್ ನಟಿಸಿರುವ ʻಗೌರಿ’ ಚಿತ್ರದ ʻಧೂಳ್ ಎಬ್ಬಿಸಾವ..’ ಹಾಡು ಹುಬ್ಬಳ್ಳಿಯಲ್ಲಿ ಅದ್ಧೂರಿಯಾಗಿ ಬಿಡುಗಡೆಗೊಂಡಿದೆ. ಗಂಡು ಮೆಟ್ಟಿದ ನಾಡು ಹುಬ್ಬಳ್ಳಿಯ ಜವಾರಿ ಭಾಷಾ ಶೈಲಿಯ ಹಾಡಿಗೆ ನಾಯಕ ನಟ ಸಮರ್ಜಿತ್ ಲಂಕೇಶ್ ಹಾಗೂ ಖ್ಯಾತ ನಟಿ ಸಂಜನಾ ಆನಂದ್ ಜಬರ್ದಸ್ತ್ ಆಗಿ ನೃತ್ಯ ಮಾಡಿದ್ದಾರೆ.

ಅನಿರುದ್ಧ್ ಶಾಸ್ತ್ರೀ, ಅನನ್ಯ ಭಟ್ ಹಾಡಿರುವ ಈ ಹಾಡಿಗೆ ಶಿವು ಬೆರ್ಗಿಯವರು ಸಾಹಿತ್ಯ ಬರೆದು, ಸಂಗೀತ ಸಂಯೋಜಿಸಿದ್ದಾರೆ. ಭಜರಂಗಿ ಮೋಹನ್ ಈ ಹಾಡಿಗೆ ನೃತ್ಯ ಸಂಯೋಜಿಸಿದ್ದಾರೆ. ಈಗಾಗಲೇ ಧೂಳ್ ಎಬ್ಬಿಸಾವ..’ ಸಾಂಗ್ ಸಖತ್ ವೈರಲ್ ಆಗುವ ಮೂಲಕ ಜನಮನ ಸೂರೆಗೊಂಡಿದೆ. ನೈಜ ಘಟನೆ ಆಧರಿಸಿ ದೊಡ್ಡ ಬಜೆಟ್‌ನಲ್ಲಿ ಸಿನಿಮಾ ಮಾಡಿದ್ದು, ಬೆಂಗಳೂರು, ಚಿಕ್ಕಮಗಳೂರು ಸೇರಿ ರಾಜ್ಯದ ವಿವಿಧೆಡೆ ಚಿತ್ರೀಕರಣ ಮಾಡಲಾಗಿದೆ.

ಅಕ್ಕ ಗೌರಿಯ ಅವರ ಮೇಲಿನ ಅಭಿಮಾನದಿಂದ ಇಂದ್ರಜಿತ್ ಲಂಕೇಶ್ ಅವರು ಈ ಚಿತ್ರಕ್ಕೆ ಅಕ್ಕನ ಹೆಸರಿಟ್ಟಿದ್ದಾರೆ. ಯುವ ನಟ ಸಮರ್ಜಿತ್ ಲಂಕೇಶ್ ಹಾಗೂ ನಾಯಕಿ ಸಾನ್ಯಾ ಅಯ್ಯರ್ ಈ ಚಿತ್ರದ ಮೂಲಕ ಸ್ಯಾಂಡಲ್‌ವುಡ್‌ಗೆ ಪ್ರವೇಶ ಮಾಡಿದ್ದಾರೆ.

ಇದನ್ನೂ ಓದಿ: Samarjit Lankesh: `ಗೌರಿ’ ಚಿತ್ರದ ಮ್ಯೂಸಿಕಲ್ ಟೀಸರ್ ಬಿಡುಗಡೆ ಮಾಡಿದ ಮಹಿಳಾ ಕ್ರಿಕೆಟ್‌ ತಾರೆ!

ಪ್ರಿಯಾಂಕ ಉಪೇಂದ್ರ, ವಸುಂಧರಾ ದಾಸ್, ಲೂಸ್ ಮಾದ ಯೋಗಿ, ಅಕುಲ್ ಬಾಲಾಜಿ, ಸಿಹಿ ಕಹಿ ಚಂದ್ರು, ಮುಖ್ಯಮಂತ್ರಿ ಚಂದ್ರು, ಕಾಂತಾರ ಖ್ಯಾತಿಯ ಮಾಲತಿ ಸುಧೀರ್, ಕೆಜಿಎಫ್ ಖ್ಯಾತಿಯ ಸಂಪತ್ ಮೈತ್ರೇಯ, ಚಂದುಗೌಡ ಸೇರಿದಂತೆ ಬಹುದೊಡ್ಡ ತಾರಾಗಣವೇ ಈ ಚಿತ್ರದಲ್ಲಿದೆ.

ಇಂದ್ರಜಿತ್​ ಲಂಕೇಶ್ (Indrajit Lankesh)​ ಅವರ ಪುತ್ರ ಸಮರ್ಜಿತ್​ ಲಂಕೇಶ್​ (Samarjit Lankesh) ಅವರು ಹೀರೊ ಆಗಿ ಚಿತ್ರರಂಗಕ್ಕೆ ಕಾಲಿಡುತ್ತಿದ್ದಾರೆ. ಇಂದ್ರಜಿತ್‌ ಲಂಕೇಶ್ ಅವರು ತಮ್ಮ ಮಗನ ಮೊದಲ ಸಿನಿಮಾಕ್ಕೆ ‘ಗೌರಿ’ ಎಂದು ಟೈಟಲ್ ಇಟ್ಟಿದ್ದಾರೆ. ಈ ಚಿತ್ರಕ್ಕೆ ‘ಗೌರಿ’ ಎನ್ನುವ ಶೀರ್ಷಿಕೆ ಇಟ್ಟಿದ್ದು ಏಕೆ ಎನ್ನುವ ಪ್ರಶ್ನೆಗೆ ಇಂದ್ರಜಿತ್ ಅವರು ಈ ಹಿಂದೆ ಉತ್ತರ ನೀಡಿದ್ದರು.

ʻನನ್ನ ಅಕ್ಕನ ಮೇಲಿ ಪ್ರೀತಿ ಹಾಗೂ ಅಭಿಮಾನಕ್ಕಾಗಿ ಗೌರಿ ಎನ್ನುವ ಶೀರ್ಷಿಕೆ ಇಟ್ಟಿದ್ದೇನೆʼʼಎಂದಿದ್ದರು. ಈ ಸಿನಿಮಾಗಾಗಿ ಸಮರ್ಜಿತ್​ ಲಂಕೇಶ್​ ಅವರು ಡ್ಯಾನ್ಸ್​, ಫೈಟಿಂಗ್​, ಕುದುರೆ ಸವಾರಿ ಸೇರಿದಂತೆ ಅನೇಕ ಕಲೆಗಳನ್ನು ಕಲಿತು ಬಂದಿದ್ದಾರೆ. ಗೌರಿ’ ಚಿತ್ರದಲ್ಲಿ ಸಮರ್ಜಿತ್​ ಲಂಕೇಶ್​ಗೆ ಜೋಡಿಯಾಗಿ ‘ಬಿಗ್​ ಬಾಸ್​’ ಖ್ಯಾತಿಯ ಸಾನ್ಯಾ ಅಯ್ಯರ್​ ಅವರು ನಟಿಸಿದ್ದಾರೆ.

ಎಜೆ ಶೆಟ್ಟಿ ಛಾಯಾಗ್ರಹಣ ಮಾಡುತ್ತಿದ್ದು, ಬಿ ಎ ಮಧು, ರಾಜಶೇಖರ್, ಮಾಸ್ತಿ ಸಂಭಾಷಣೆ ಬರೆಯುತ್ತಿದ್ದಾರೆ. ಕೆ ಕಲ್ಯಾಣ್, ವಿ ನಾಗೇಂದ್ರ ಪ್ರಸಾದ್, ಕವಿರಾಜ್ ಸಾಹಿತ್ಯ ಬರೆಯುತ್ತಿದ್ದಾರೆ.

Continue Reading

ಟಾಲಿವುಡ್

Pawan Kalyan: ಪವನ್‌ ಕಲ್ಯಾಣ್‌ ಗೆದ್ದ ಬಳಿಕ ತಲೆಗೂದಲಿಗೆ ಕತ್ತರಿ ಹಾಕಿದ ಡೈ ಹಾರ್ಡ್​ ಫ್ಯಾನ್!

Pawan Kalyan: ತೋಟ ನರೇಂದ್ರ ಉರು ತೆನಾಲಿ ಸಮೀಪದ ಕೊಳಕಲೂರು. 2019ನೇ ಚುನಾವಣೆಯಲ್ಲಿ ತಮ್ಮ ನೆಚ್ಚಿನ ನಟ ಪವನ್ ಕಲ್ಯಾಣ್ ಅವರು ಸ್ಪರ್ಧಿಸಿದ್ದ ಎರಡೂ ಕ್ಷೇತ್ರಗಳಲ್ಲಿ ಸೋತಿದ್ದರು. ಇದರಿಂದ ನರೇಂದ್ರ ತೀವ್ರ ಖಿನ್ನತೆಗೆ ಒಳಗಾಗಿದ್ದರು. ಎರಡು ಕಡೆ ಭಾರಿ ನಿರೀಕ್ಷೆ ಇಟ್ಟುಕೊಂಡಿದ್ದ ನರೇಂದ್ರ ಅವರಿಗೆ ಪವನ್‌ ಕಲ್ಯಾಣ್‌ ಸೋಲು ಭಾರಿ ನೋವುಂಟು ಮಾಡಿತ್ತು.

VISTARANEWS.COM


on

Pawan Kalyan Fan Narendra cut hairs after Five Years
Koo

ಬೆಂಗಳೂರು: ಇತ್ತೀಚೆಗೆ ನಡೆದ ಆಂಧ್ರ ಪ್ರದೇಶ ವಿಧಾನಸಭಾ ಚುನಾವಣೆಯಲ್ಲಿ ಚಂದ್ರಬಾಬು ನಾಯ್ಡು ನೇತೃತ್ವದ ಟಿಡಿಪಿ (Telugu Desam Party), ಬಿಜೆಪಿ ಮತ್ತು ಪವನ್‌ ಕಲ್ಯಾಣ್‌ ನೇತೃತ್ವದ ಜನಸೇನಾ ಪಾರ್ಟಿ (Jana Sena Party)ಯ ಎನ್‌ಡಿಎ (NDA) ಒಕ್ಕೂಟ ಭರ್ಜರಿ ಬಹುಮತ ಪಡೆದು ಅಧಿಕಾರಕ್ಕೆ ಬಂದಿದೆ. ಮುಖ್ಯಮಂತ್ರಿಯಾಗಿ ಚಂದ್ರಬಾಬು ನಾಯ್ಡು ಇಂದು (ಜೂನ್‌ 12) ಪ್ರಮಾಣ ವಚನ ಸ್ವೀಕರಿಸಿದ್ದಾರೆ. ಇದೇ ವೇಳೆ ಉಪ ಮುಖ್ಯಮಂತ್ರಿಯಾಗಿ ಪವನ್‌ ಕಲ್ಯಾಣ್‌ (Pawan Kalyan) ಅಧಿಕಾರ ವಹಿಸಿಕೊಂಡರು. 2019ರ ಚುನಾವಣೆಯಲ್ಲಿ ಪವನ್‌ ಕಲ್ಯಾಣ್‌ ಎರಡೂ ಕ್ಷೇತ್ರಗಳಲ್ಲಿ ಸೋತು ನಗೆಪಾಟಲಿಗೀಡಾಗಿದ್ದರು. ಆ ಸಮಯದಲ್ಲಿ ಪವನ್‌ ಅವರ ಫ್ಯಾನ್‌ ತೋಟ ನರೇಂದ್ರ ಅವರು ಪವನ್ ಗೆದ್ದೇ ಗೆಲ್ಲುತ್ತಾರೆಂದು ಸವಾಲು ಹಾಕಿ, ಪವನ್ ಗೆಲ್ಲುವವರೆಗೂ ತಲೆಗೂದಲು ಕತ್ತರಿವುದಿಲ್ಲ ಎಂದು ಪ್ರಮಾಣ ಮಾಡಿದ್ದರು. ಇದೀಗ ಕೂದಲಿಗೆ ಕತ್ತರಿ ಹಾಕಿದ್ದಾರೆ.

ತೋಟ ನರೇಂದ್ರ ಉರು ತೆನಾಲಿ ಸಮೀಪದ ಕೊಳಕಲೂರು. 2019ನೇ ಚುನಾವಣೆಯಲ್ಲಿ ತಮ್ಮ ನೆಚ್ಚಿನ ನಟ ಪವನ್ ಕಲ್ಯಾಣ್ ಅವರು ಸ್ಪರ್ಧಿಸಿದ್ದ ಎರಡೂ ಕ್ಷೇತ್ರಗಳಲ್ಲಿ ಸೋತಿದ್ದರು. ಇದರಿಂದ ನರೇಂದ್ರ ತೀವ್ರ ಖಿನ್ನತೆಗೆ ಒಳಗಾಗಿದ್ದರು. ಎರಡು ಕಡೆ ಭಾರಿ ನಿರೀಕ್ಷೆ ಇಟ್ಟುಕೊಂಡಿದ್ದ ನರೇಂದ್ರ ಅವರಿಗೆ ಪವನ್‌ ಕಲ್ಯಾಣ್‌ ಸೋಲು ಭಾರಿ ನೋವುಂಟು ಮಾಡಿತ್ತು. ಹಾಗಾಗಿ ಆ ಸಮಯದಲ್ಲಿ ನರೇಂದ್ರ ಅವರು ಪ್ರಮಾಣ ಮಾಡಿದರು. ಪವನ್ ಕಲ್ಯಾಣ್ ಗೆದ್ದು ವಿಧಾನಸಭೆಗೆ ಕಾಲಿಡುವವರೆಗೂ ಕೂದಲಿಗೆ ಕತ್ತರಿ ಹಾಕಲ್ಲ ಎಂದು. ಇದೀಗ ಉಪ ಮುಖ್ಯಮಂತ್ರಿಯಾಗಿ ಪವನ್‌ ಕಲ್ಯಾಣ್‌ (Pawan Kalyan) ಅಧಿಕಾರ ವಹಿಸಿಕೊಂಡಿದ್ದಾರೆ. ಐದು ವರ್ಷಗಳ ಕಾಲ ಕೂದಲು ಬೆಳೆಸುತ್ತಲೇ ಪಕ್ಷಕ್ಕಾಗಿ ದುಡಿದ ನರೇಂದ್ರ ಕೊನೆಗೂ ಕೂದಲಿಗೆ ಕತ್ತರಿ ಹಾಕಿದ್ದಾರೆ.

ಇದನ್ನೂ ಓದಿ: Pawan Kalyan: ಆಂಧ್ರ ಪ್ರದೇಶದ ಉಪ ಮುಖ್ಯಮಂತ್ರಿಯಾಗಿ ಪವನ್‌ ಕಲ್ಯಾಣ್‌ ಆಯ್ಕೆ; ಇಂದು ಪ್ರಮಾಣ ವಚನ ಸ್ವೀಕಾರ

ಪವನ್ ಕಲ್ಯಾಣ್ ಸೇರಿದಂತೆ ಜನಸೇನಾದ 21 ಅಭ್ಯರ್ಥಿಗಳು ಈ ಬಾರಿ ಆಂಧ್ರ ಪ್ರದೇಶ ವಿಧಾನಸಭೆ ಚುನಾವಣೆಗೆ ಸ್ಪರ್ಧೆ ಮಾಡಿದ್ದರು. ಪವನ್ ಕಲ್ಯಾಣ್ ಪೀಠಾಪುರಂ ಕ್ಷೇತ್ರದಿಂದ ಚುನಾವಣೆ ಎದುರಿಸಿದ್ದರು. ಎದುರಾಳಿ ವೈಸಿಪಿ ಅಭ್ಯರ್ಥಿ ವಂಗಾ ಗೀತ ವಿರುದ್ಧ ಭಾರಿ ಅಂತರದ ಜಯವನ್ನು ಪವನ್ ಕಲ್ಯಾಣ್ ಪಡೆದಿದ್ದಾರೆ. 

ವಿಜಯವಾಡದಲ್ಲಿರುವ ಮೇಧಾ ಐಟಿ ಪಾರ್ಕ್‌ ಬಳಿ ನಡೆದ ಅದ್ಧೂರಿ ಕಾರ್ಯಕ್ರಮದಲ್ಲಿ ಎನ್‌.ಚಂದ್ರಬಾಬು ನಾಯ್ಡು ಅವರು ಮುಖ್ಯಮಂತ್ರಿಯಾಗಿ ಪ್ರಮಾಣವಚನ ಸ್ವೀಕರಿಸಿದರು. ಇದಾದ ಬಳಿಕ ಮೋದಿ ಅವರು ನಾಯ್ಡು ಅವರಿಗೆ ಶುಭ ಕೋರಿದರು. ನಂತರ ಪವನ್‌ ಕಲ್ಯಾಣ್‌ ಅವರು ತಮ್ಮ ಸಹೋದರ ಚಿರಂಜೀವಿ ಕೂಡ ಇಲ್ಲೇ ಇದ್ದಾರೆ ಎಂದು ಮೋದಿ ಅವರಿಗೆ ಹೇಳಿದರು. ಆಗ ಮೋದಿ ಅವರು ಚಿರಂಜೀವಿ ಬಳಿ ಹೋಗಿ, ಅವರ ಹಾಗೂ ಪವನ್‌ ಕಲ್ಯಾಣ್‌ ಕೈ ಹಿಡಿದು ವೇದಿಕೆಗೆ ಕರೆತಂದರು. ಬಳಿಕ ಮೂವರೂ ಕೈ ಎತ್ತಿದರು. ಆ ಮೂಲಕ ಒಗ್ಗಟ್ಟಿನ ಬಲ ಪ್ರದರ್ಶನ ಮಾಡಿದರು.

Continue Reading

ಸ್ಯಾಂಡಲ್ ವುಡ್

Actor Darshan: ಹಲವು ವರ್ಷಗಳಿಂದ ದರ್ಶನ್ ಆಪ್ತ ʻಮಲ್ಲಿʼನಾಪತ್ತೆ; ರೇಣುಕಾ ಸ್ವಾಮಿಯ ಗತಿಯೇ ಆಯ್ತಾ?

Actor Darshan: ಇದೀಗ ದರ್ಶನ್ ಆಪ್ತ ಮಲ್ಲಿಕಾರ್ಜುನ್ ಅಲಿಯಾಸ್ ಮಲ್ಲಿ ಅಚಾನಕ್ಕಾಗಿ ಕಾಣೆಯಾದ ಪ್ರಕರಣ ಇದೀಗ ಮುನ್ನೆಲೆಗೆ ಬಂದಿದೆ. 2018ರ ಫೆಬ್ರವರಿ ತಿಂಗಳು 9ನೇ ತಾರೀಕು ತೆರೆಕಂಡ “ಪ್ರೇಮ ಬರಹʼದ ಕಲೆಕ್ಷನ್ ಅಮೌಂಟ್ ಮಲ್ಲಿಕಾರ್ಜುನ್ ಕೊಟ್ಟಿರಲಿಲ್ಲ. 2018 ಫೆಬ್ರವರಿ ತಿಂಗಳ ನಂತರ ಮುಂದಿನ ಆರೇಳು ತಿಂಗಳು ಅರ್ಜುನ್ ಸರ್ಜಾ ಅವರು ಮಲ್ಲಿಕಾರ್ಜುನ್ ಅವರಲ್ಲಿ ವಿತರಣೆಯ ಹಣವನ್ನು ಕೊಡುವಂತೆ ಕೇಳಿಕೊಂಡಿದ್ದಾರೆ. ಇದೇ ಸಮಯದಲ್ಲಿ ಮಲ್ಲಿಕಾರ್ಜುನ್ ನಾಪತ್ತೆ ಆಗಿಬಿಟ್ಟರು.

VISTARANEWS.COM


on

Actor Darshan Assistant Malli missing case
Koo

ಬೆಂಗಳೂರು: ನಟ ದರ್ಶನ್ (Actor Darshan) ಅವರ ಮಾಜಿ ಪಿ.ಎ ಮಲ್ಲಿಕಾರ್ಜುನ್ ವಿರುದ್ಧ ಹಲವು ಆರೋಪಗಳು ಈ ಹಿಂದೆ ಕೇಳಿ ಬಂದಿದ್ದವು. ನಟ ಅರ್ಜುನ್ ಸರ್ಜಾ (Arjun Sarja) ಅವರು ʻಪ್ರೇಮ ಬರಹ’ (Prema Baraha) ಚಿತ್ರದ ವಿತರಣೆ ಹಣದ ವಿಚಾರವಾಗಿ ಮಲ್ಲಿಕಾರ್ಜುನ್ ವಿರುದ್ಧ ಕೇಸ್ ದಾಖಲಿಸಿದ್ದರು. ಮಲ್ಲಿಕಾರ್ಜುನ್ ವಿರುದ್ಧ 1 ಕೋಟಿ ರೂ. ಚೆಕ್ ಬೌನ್ಸ್ ಪ್ರಕರಣ ದಾಖಲಾಗಿದೆ. ಆದರೆ, ಮಲ್ಲಿ ಕಳೆದ 7 ವರ್ಷಗಳಿಂದ ನಾಪತ್ತೆಯಾಗಿದ್ದಾರೆ ಎಂದು ದೂರು ನೀಡಿದ್ದಾರೆ ಅರ್ಜುನ್ ಸರ್ಜಾ. ಇದೀಗ ದರ್ಶನ್ ಆಪ್ತ ಮಲ್ಲಿಕಾರ್ಜುನ್ ಅಲಿಯಾಸ್ ಮಲ್ಲಿ ಅಚಾನಕ್ಕಾಗಿ ಕಾಣೆಯಾದ ಪ್ರಕರಣ ಇದೀಗ ಮುನ್ನೆಲೆಗೆ ಬಂದಿದೆ. ಮಲ್ಲಿ ಎಲ್ಲಿದ್ದಾನೆ? ಬದುಕಿದ್ದಾನೆಯೇ? ಅಥವಾ ರೇಣುಕಾ ಸ್ವಾಮಿ ರೀತಿಯ ಆತನದ್ದೂ ಕೊಲೆ ಆಗಿದೆಯೇ? ಎಂಬ ಪ್ರಶ್ನೆಗಳು ಸಾಮಾಜಿಕ ಜಾಲತಾಣದಲ್ಲಿ ಎದ್ದಿವೆ.

ಶ್ರೀ ಕಾಲಕಾಲೇಶ್ವರ ಎಂಟರ್​ಪ್ರೈಸಸ್ ಕಂಪನಿ ಒಡೆಯರಾಗಿದ್ದ ಮಲ್ಲಿಕಾರ್ಜುನ್, ಗಾಂಧಿನಗರದಲ್ಲಿ ಹಲವರಿಗೆ 11 ಕೋಟಿ ರೂ. ಮೋಸ ಮಾಡಿರುವುದಾಗಿ ತಿಳಿದು ಬಂದಿತ್ತು. ಮಾತ್ರವಲ್ಲ ನಟ ದರ್ಶನ್‌ಗೆ 2 ಕೋಟಿ ರೂ. ಮೋಸ ಮಾಡಿ ನಾಪತ್ತೆಯಾಗಿದ್ದಾರೆ ಎಂಬ ದೂರಿತ್ತು. ಮಲ್ಲಿಕಾರ್ಜುನ್ ವಿಚಾರವಾಗಿ ಅರ್ಜುನ್ ಸರ್ಜಾ ಅವರು ಮತ್ತು ಅವರ ಪರ ವಕೀಲರು ನ್ಯಾಯಾಲಯದ ಮೊರೆ ಹೋಗಿದ್ದರು. ಮಲ್ಲಿಕಾರ್ಜುನ್‌ ಹಾಜರಾಗದೇ ಇದ್ದರೆ ವಾರಂಟ್ ಜಾರಿ ಮಾಡಬಹುದು ಎಂದು ಕೋರ್ಟ್‌ ಆದೇಶ ನೀಡಿತ್ತು.

ಪ್ರೇಮ ಬರಹ ಸಿನಿಮಾ ಪ್ರಕರಣ

ಅರ್ಜುನ್ ಸರ್ಜಾ (Arjun Sarja) ನಿರ್ದೇಶನ ಮತ್ತು ನಿರ್ಮಾಣದ ಚಿತ್ರ ʻಪ್ರೇಮ ಬರಹʼ ಚಿತ್ರವನ್ನು ಮಲ್ಲಿಕಾರ್ಜುನ್ (ಮಲ್ಲಿ) ರಾಜ್ಯಾದ್ಯಂತ ವಿತರಣೆ ಮಾಡಿದ್ದರು. 2018 ಫೆಬ್ರವರಿ 9ನೇ ತಾರೀಖು ರಾಜ್ಯಾದ್ಯಂತ ʻಪ್ರೇಮ ಬರಹʼ ಸಿನಿಮಾ ರಿಲೀಸ್ ಆಗಿತ್ತು. ಚಂದನ್ ಕುಮಾರ್ ಹಾಗೂ ಅರ್ಜುನ್ ಸರ್ಜಾ ಅವರ ಮೊದಲ ಪುತ್ರಿ ಐಶ್ವರ್ಯ ಅರ್ಜುನ್ ಮುಖ್ಯಭೂಮಿಕೆಯಲ್ಲಿ ನಟಿಸಿದ್ದರು. ನಟ ಚಾಲೆಂಜಿಂಗ್ ಸ್ಟಾರ್ ದರ್ಶನ್ ಹಾಗೂ ಆ್ಯಕ್ಷನ್ ಪ್ರಿನ್ಸ್ ಧ್ರುವ ಸರ್ಜಾ ಮತ್ತು ದಿವಂಗತ ಚಿರು ಸರ್ಜಾ ಹಾಡೊಂದರಲ್ಲಿ ಕಾಣಿಸಿಕೊಂಡಿದ್ದರು. 2018ರ ಶುರುವಿನಲ್ಲಿ ಎಲ್ಲವೂ ಚೆನ್ನಾಗಿಯೇ ಇತ್ತು. ಆದರೆ ಪ್ರೇಮ ಬರಹ ಸಿನಿಮಾದ ವಿತರಣೆಯ ಹಣದ ವಿಚಾರದಲ್ಲಿ ದರ್ಶನ್ ಮಾಜಿ ಪಿ.ಎ ಮಲ್ಲಿಕಾರ್ಜುನ್ ಮತ್ತು ನಟ-ನಿರ್ಮಾಪಕ-ನಿರ್ದೇಶಕ ಅರ್ಜುನ್ ಸರ್ಜಾರಲ್ಲಿ ವೈ ಮನಸ್ಸು ಶುರುವಾಯ್ತು. ಅರ್ಜುನ್ ಸರ್ಜಾ ಮತ್ತು ಮಲ್ಲಿಕಾರ್ಜುನ್ ನಡುವೆ ʻಪ್ರೇಮ ಬರಹʼ ಸಿನಿಮಾದ ವಿತರಣೆಯ ವಿಚಾರವಾಗಿ ಬರೋಬ್ಬರಿ 1 ಕೋಟಿ ರೂ. ಕೊಡುವ ಒಪ್ಪಂದ ಆಗಿತ್ತು. ಈ ವಿಚಾರವಾಗಿ ಸ್ವತಃ ಮಲ್ಲಿಕಾರ್ಜುನ್ ಅವರೇ ಅವರದ್ದೇ ಆದ ಶ್ರೀ ಕಾಲಕಾಲೇಶ್ವರ ಎಂಟರ್​ಪ್ರೈಸಸ್ ಬುಕ್​ಲೆಟ್‌​ನಲ್ಲಿ ವಿತರಣೆಯ ಹಣದ ವಿಚಾರವನ್ನು ಬರೆದುಕೊಟ್ಟಿದ್ದರು.

ಇದನ್ನೂ ಓದಿ: Actor Darshan: ಚಿನ್ನುಮರಿ ತಂಟೆಗೆ ಹೋದ್ರೆ ಒದೆ, ಪವಿತ್ರಾ ಗೌಡ ತಂಟೆಗೆ ಬಂದ್ರೆ ಕೊಲೆ; ಟ್ರೋಲ್ ಆಗುತ್ತಿದೆ ​ ದರ್ಶನ್​ ಕೊಲೆ ಕೇಸ್​​

ಪ್ರೇಮ ಬರಹದ ಕಲೆಕ್ಷನ್ ಅಮೌಂಟ್ ಕೊಡಲೇ ಇಲ್ಲ

2018ರ ಫೆಬ್ರವರಿ ತಿಂಗಳು 9ನೇ ತಾರೀಕು ತೆರೆಕಂಡ “ಪ್ರೇಮ ಬರಹʼದ ಕಲೆಕ್ಷನ್ ಅಮೌಂಟ್ ಮಲ್ಲಿಕಾರ್ಜುನ್ ಕೊಟ್ಟಿರಲಿಲ್ಲ. 2018 ಫೆಬ್ರವರಿ ತಿಂಗಳ ನಂತರ ಮುಂದಿನ ಆರೇಳು ತಿಂಗಳು ಅರ್ಜುನ್ ಸರ್ಜಾ ಅವರು ಮಲ್ಲಿಕಾರ್ಜುನ್ ಅವರಲ್ಲಿ ವಿತರಣೆಯ ಹಣವನ್ನು ಕೊಡುವಂತೆ ಕೇಳಿಕೊಂಡಿದ್ದಾರೆ. ಇದೇ ಸಮಯದಲ್ಲಿ ಮಲ್ಲಿಕಾರ್ಜುನ್ ನಾಪತ್ತೆ ಆಗಿಬಿಟ್ಟರು. ಒಟ್ಟು ಸುಮಾರು 11 ಕೋಟಿ ರೂ. ಮೋಸ ಮಾಡಿ ಓಡಿಹೋಗಿದ್ದಾರೆ ಎಂದು ಆಗ ಗಾಂಧಿನಗರದಲ್ಲಿ ಮಾತುಗಳು ಕೇಳಿಬರುತ್ತಿತ್ತು. ಈ ವಿಚಾರವನ್ನ ನಟ ದರ್ಶನ್ ಅವರಲ್ಲಿ ಕೇಳಿದಾಗ ‘‘ನನಗೆ 2 ಕೋಟಿ ಕೊಡಬೇಕಿತ್ತು ಮಲ್ಲಿ‘. ನನ್ನ ಹೆಸರಿನಲ್ಲಿ ಅನೇಕರಿಗೆ ಮೋಸ ಮಾಡಿದ್ದಾನೆ ಎನ್ನುವ ವಿಚಾರ ಕೇಳಿದ್ದೇನೆ. ಆತ ಎಲ್ಲಿಗೆ ಹೋಗಿದ್ದಾನೆ ಎಂದು ನನಗೆ ಗೊತ್ತಿಲ್ಲ ಎಂದಿದ್ದರುʼʼ ದರ್ಶನ್.

ಮುಲತಃ ಉತ್ತರ ಕರ್ನಾಟಕದ ಗದಗ ಜಿಲ್ಲೆಯವರಾಗಿದ್ದ ಮಲ್ಲಿಕಾರ್ಜುನ್ ಏಳು ವರ್ಷದಿಂದ ಯಾರಿಗೂ ಸಿಕ್ಕಿಲ್ಲ. 2018ರಲ್ಲಿ ಮಲ್ಲಿಕಾರ್ಜುನ್ ನಾಪತ್ತೆಯಾದಾಗ ಅರ್ಜುನ್ ಸರ್ಜಾ ಟೀಮ್ ಅವರ ಊರಿನ ಕಡೆ ಹೊರಟಿತ್ತು. ಮಲ್ಲಿ ಅವರ ಪತ್ನಿ ಕೊಪ್ಪಳ ಮೂಲದವರು. ಆಗ ಅವರ ಮನೆಗೆ ಹುಡುಕಿಕೊಂಡು ಹೋದಾಗ ಮಲ್ಲಿಕಾರ್ಜುನ್ ಪತ್ನಿ ತೇಜಸ್ವಿನಿ ”ನಮ್ಮ ಮನೆಗೂ ನನ್ನ ಗಂಡ ಬಂದಿಲ್ಲ. ಇದೊಂದು ಪತ್ರ ಬರೆದು ಹೊರಟು ಹೋಗಿದ್ದಾರೆʼʼ ಎಂದು ಹೇಳಿದ್ದರು.

ಪತ್ರದಲ್ಲಿ ಏನಿದೆ?

ಪ್ರೀತಿಯ ತೇಜಸ್ವಿನಿಗೆ, ಮೊದಲನೆದಾಗಿ ದಯವಿಟ್ಟು ನನ್ನನ್ನು ಕ್ಷಮಿಸು. ನಾನು ನನ್ನ ವೈಯಕ್ತಿಕ ವ್ಯವಹಾರಕ್ಕಾಗಿ ತುಂಬಾ ಸಾಲ ಮಾಡಿಕೊಂಡು ಅದನ್ನು ತೀರಿಸಲಾಗದ ಪರಿಸ್ಥಿತಿಗೆ ಬಂದು ತಲುಪಿದ್ದೇನೆ. ನನ್ನ ಈ ಕೆಲಸದಿಂದ ನಾನು ಯಾರಿಗೂ ಮುಖ ತೋರಿಸಲಾಗದ ಪರಿಸ್ಥಿತಿಯಲ್ಲಿದ್ದೇನೆ. ಆದ ಕಾರಣ ನಾನು ಎಲ್ಲೋ ಕಷ್ಟಪಟ್ಟು ದುಡಿದು ವಾಪಸ್ಸು ಬಂದು ಸಾಲ ತೀರಿಸಿ, ನನಗಂಟಿರುವ ಕಳಂಕ ಹೋಗಲಾಡಿಸಿ ಮತ್ತೆ ಧೈರ್ಯವಾಗಿ ತಲೆಯತ್ತಿ ಎಲ್ಲರ ಮುಂದೆ ಜೀವನ ನಡೆಸಬೇಕೆಂದುಕೊಂಡಿದ್ದೇನೆ. ಅಲ್ಲಿಯವರಿಗೆ ನಿಮ್ಮ ಎದುರಿಗೆ ಬರುವ ಶಕ್ತಿ ನನಗಿಲ್ಲ. ನನ್ನನ್ನು ಯಾವುದೇ ಕಾರಣಕ್ಕೂ ಹುಡುಕುವ ಪ್ರಯತ್ನ ಮಾಡಬೇಡಿ. ನನ್ನ ಸಮಸ್ಯೆಯಿಂದ ನಿನ್ನನ್ನು, ಮಗನನ್ನು ಹಾಗೂ ಮನೆಯವರನ್ನೂ ಬಿಟ್ಟು ಹೋಗುವ ಪರಿಸ್ಥಿತಿ ಬಂದೊದಗಿದೆ. ದಯವಿಟ್ಟು ನನ್ನನ್ನು ಕ್ಷಮಿಸುʼʼ ಎಂದು ಬರೆದಿದ್ದರು.

ಇದೀಗ ರೇಣುಕಾ ಸ್ವಾಮಿ ಪ್ರಕರಣ ಹೊರಬಂದ ಬಳಿಕ ಮಲ್ಲಿ ಕುರಿತು ಸಹ ಪ್ರಶ್ನೆಗಳು ಎದ್ದಿವೆ. ಮಲ್ಲಿ ಎಲ್ಲಿದ್ದಾನೆ? ಬದುಕಿದ್ದಾನೆಯೇ? ಅಥವಾ ರೇಣುಕಾ ಸ್ವಾಮಿ ರೀತಿಯ ಆತನದ್ದೂ ಕೊಲೆ ಆಗಿವೆಯೇ? ಎಂಬ ಪ್ರಶ್ನೆಗಳು ಸಾಮಾಜಿಕ ಜಾಲತಾಣದಲ್ಲಿ ಎದ್ದಿವೆ.2018ರ ಬಳಿಕ ಮಲ್ಲಿ ಅಚಾನಕ್ಕಾಗಿ ಕಾಣೆಯಾದರು. ಅಂದಿನಿಂದ ಈ ವರೆಗೆ ಮಲ್ಲಿ ಎಲ್ಲಿದ್ದಾರೆಂಬುದು ಯಾರಿಗೂ ಗೊತ್ತಿಲ್ಲ.

Continue Reading
Advertisement
Sunny Leone
ಸಿನಿಮಾ3 mins ago

Sunny Leone: ಸನ್ನಿ ಲಿಯೋನ್ ಬೇಕೇಬೇಕೆಂದು ವಿದ್ಯಾರ್ಥಿಗಳ ಪಟ್ಟು; ಕೇರಳ ವಿವಿಗೆ ಇಕ್ಕಟ್ಟು!

ಕರ್ನಾಟಕ6 mins ago

Course Fee Hike: ತಾಂತ್ರಿಕ ಶಿಕ್ಷಣ ಕೋರ್ಸ್‌ಗಳ ಪ್ರವೇಶ ಶುಲ್ಕ ಶೇ.10ರಷ್ಟು ಹೆಚ್ಚಳ

engineering students have invented a unique fire extinguisher drone at bengaluru
ಕರ್ನಾಟಕ15 mins ago

Bengaluru News: ಬೆಂಕಿ ನಂದಿಸುವ ‘ವಿಶಿಷ್ಟ ಡ್ರೋನ್‌’; ಎಂಜಿನಿಯರಿಂಗ್‌ ವಿದ್ಯಾರ್ಥಿಗಳ ಆವಿಷ್ಕಾರ!

RBI Penalty
ದೇಶ15 mins ago

RBI Penalty: ಸೆಂಟ್ರಲ್‌ ಬ್ಯಾಂಕ್‌ ಆಫ್‌ ಇಂಡಿಯಾಗೆ 1.45 ಕೋಟಿ ರೂ. ದಂಡ ವಿಧಿಸಿದ ಆರ್‌ಬಿಐ; ಕಾರಣ ಏನು?

Government urdu school roof collapse in Shira
ತುಮಕೂರು20 mins ago

Shira News: ಸರ್ಕಾರಿ ಶಾಲಾ ಕೊಠಡಿ ಚಾವಣಿ ಕುಸಿತ; ಶಿಕ್ಷಕಿ ತಲೆಗೆ ಪೆಟ್ಟು, ವಿದ್ಯಾರ್ಥಿಗಳು ಪಾರು

Journalist Sunayana Suresh is now a director
ಕರ್ನಾಟಕ24 mins ago

Kannada Short Movie: ಪತ್ರಕರ್ತೆ ಸುನಯನಾ ಸುರೇಶ್ ಈಗ ನಿರ್ದೇಶಕಿ; ‘ಮೌನ ರಾಗ’ ಕಿರುಚಿತ್ರಕ್ಕೆ ನಿರ್ದೇಶನ

Road Accident
ಕರ್ನಾಟಕ1 hour ago

Road Accident: ಬೆಳಗಾವಿಯಲ್ಲಿ ಕಾಲೇಜು ಬಸ್‌ಗೆ ಟಿಪ್ಪರ್ ಡಿಕ್ಕಿ; 40ಕ್ಕೂ ಹೆಚ್ಚು ವಿದ್ಯಾರ್ಥಿಗಳಿಗೆ ಗಾಯ

Narendra Modi
ದೇಶ1 hour ago

Narendra Modi: ಸ್ನೇಹಿತ ಮೋದಿಯನ್ನು ಕೈಮುಗಿದು ಆತ್ಮೀಯವಾಗಿ ಸ್ವಾಗತಿಸಿದ ಇಟಲಿ ಪ್ರಧಾನಿ ಮೆಲೋನಿ; Video ಇದೆ

Bagalkot News
ಕರ್ನಾಟಕ1 hour ago

Bagalkot News: ಬುರ್ಕಾ ಧರಿಸಿ ಓಡಾಡ್ತಿದ್ದ ವ್ಯಕ್ತಿಗೆ ಮಹಿಳೆಯರಿಂದ ಚಪ್ಪಲಿ ಏಟು!

Petrodollar Deal
ವಿದೇಶ2 hours ago

Petrodollar Explainer: ಅಮೆರಿಕ ಜೊತೆಗಿನ 50 ವರ್ಷಗಳ ಪೆಟ್ರೊಡಾಲರ್‌ ಒಪ್ಪಂದ ಕೊನೆಗೊಳಿಸಿದ ಸೌದಿ ಅರೇಬಿಯಾ; ಡಾಲರ್‌ ಗರ್ವ ಭಂಗ?

Sharmitha Gowda in bikini
ಕಿರುತೆರೆ8 months ago

Geetha Serial Kannada: ನಿದ್ದೆ ಕದ್ದ ಚೋರಿ! ನಟಿ `ಭಾನುಮತಿ’ ಹಾಟ್‌ ಪೋಟೊಗಳಿಗೆ ಫ್ಯಾನ್ಸ್ ಫುಲ್ ಫಿದಾ

Kannada Serials
ಕಿರುತೆರೆ8 months ago

Kannada Serials TRP: 2ನೇ ಸ್ಥಾನದಲ್ಲಿ 2 ಧಾರಾವಾಹಿಗಳು; ಟಿಆರ್‌ಪಿ ರೇಸ್‌ನಲ್ಲಿಲ್ಲ ಭಾಗ್ಯಲಕ್ಷ್ಮೀ!

Bigg Boss- Saregamapa 20 average TRP
ಕಿರುತೆರೆ8 months ago

Kannada Serials TRP: ಏಳನೇ ಸ್ಥಾನಕ್ಕೆ ʻಅಮೃತಧಾರೆʼ ಕುಸಿತ; ಬಿಗ್‌ ಬಾಸ್‌-ಸರಿಗಮಪ ಟಿಆರ್‌ಪಿ ಎಷ್ಟು?

galipata neetu
ಕಿರುತೆರೆ7 months ago

Kanyadana Serial: ಕಿರುತೆರೆಗೆ ಮತ್ತೆ ಎಂಟ್ರಿ ಕೊಟ್ಟ ʻಗಾಳಿಪಟʼ ಖ್ಯಾತಿಯ ʻನೀತುʼ!

Kannada Serials
ಕಿರುತೆರೆ9 months ago

Kannada Serials TRP: ನಾಲ್ಕನೇ ಸ್ಥಾನಕ್ಕೆ ಕುಸಿತ ಕಂಡ ʻಸೀತಾ ರಾಮʼ; ಟಿಆರ್‌ಪಿ ರೇಸ್‌ಗೆ ʻಭಾಗ್ಯಲಕ್ಷ್ಮಿʼ ಬ್ಯಾಕ್‌!

Kannada Serials
ಕಿರುತೆರೆ8 months ago

Kannada Serials TRP: ಟಿಆರ್‌ಪಿಯಲ್ಲಿ ʻಭಾಗ್ಯಲಕ್ಷ್ಮೀʼ ಹವಾ; ʻಪುಟ್ಟಕ್ಕನ ಮಕ್ಕಳುʼ ಧಾರಾವಾಹಿಗೆ ಸಂಕಷ್ಟ!

Bigg Boss' dominates TRP; Sita Rama fell to the sixth position
ಕಿರುತೆರೆ8 months ago

Kannada Serials TRP: ಟಿಆರ್‌ಪಿಯಲ್ಲಿ ʻಬಿಗ್ ಬಾಸ್ʼದೇ ಮೇಲುಗೈ; 6ನೇ ಸ್ಥಾನಕ್ಕೆ ಕುಸಿದ ʻಸೀತಾ ರಾಮʼ

geetha serial Dhanush gowda engagement
ಕಿರುತೆರೆ6 months ago

Dhanush Gowda: ಗೀತಾ ಧಾರಾವಾಹಿ ನಟನ ನಿಶ್ಚಿತಾರ್ಥ; ಭವ್ಯಾಳ ಕಮೆಂಟ್‌ ಬಾಕ್ಸ್‌ ಆಫ್‌!

varun
ಕಿರುತೆರೆ7 months ago

Brindavana Serial: ʼಬೃಂದಾವನʼ ಧಾರಾವಾಹಿಯಲ್ಲಿ ದೊಡ್ಡ ಟ್ವಿಸ್ಟ್‌; ಪ್ರಮುಖ ಪಾತ್ರಧಾರಿಯೇ ಬದಲು

Kannada Serials
ಕಿರುತೆರೆ9 months ago

Kannada Serials TRP: ಟಿಆರ್‌ಪಿಯಲ್ಲಿ ಏರಿಕೆ ಕಂಡ ʻಅಮೃತಧಾರೆʼ; ʻಗಟ್ಟಿಮೇಳʼಕ್ಕೆ ನಾಲ್ಕನೇ ಸ್ಥಾನ!

Karnataka Weather Forecast
ಮಳೆ2 hours ago

Karnataka Weather : ಕರಾವಳಿ, ಉತ್ತರ ಒಳನಾಡಿನಲ್ಲಿ ವರುಣಾರ್ಭಟ; ನಾಳೆಯು ಹಲವೆಡೆ ಸಿಕ್ಕಾಪಟ್ಟೆ ಮಳೆ

Actor Darshan
ಬೆಂಗಳೂರು3 hours ago

Actor Darshan : ರೇಣುಕಾಸ್ವಾಮಿಯನ್ನು ಕಿಡ್ನ್ಯಾಪ್ ಮಾಡಿ ಕರೆತರುವ ದೃಶ್ಯ ಸಿಸಿ ಕ್ಯಾಮೆರಾದಲ್ಲಿ ಸೆರೆ!

actor Darshan
ಬೆಂಗಳೂರು4 hours ago

Actor Darshan : ರೇಣುಕಾಸ್ವಾಮಿ ಕೊಲೆ ಕೇಸ್‌ನಲ್ಲಿ ಮತ್ತಿಬ್ಬರು ಸರೆಂಡರ್‌; ಆರೋಪಿಗಳ ಸಂಖ್ಯೆ 16ಕ್ಕೆ ಏರಿಕೆ

Actor Darshan
ಸಿನಿಮಾ5 hours ago

Actor Darshan : ರೇಣುಕಾಸ್ವಾಮಿ ‌ಮೃತದೇಹ ಬಿಸಾಡಿ ಬಳಿಕ ಸಾಕ್ಷ್ಯಇದ್ದ 2 ಮೊಬೈಲ್‌ಗಳನ್ನು ಮೋರಿಗೆ ಎಸೆದ್ರಾ ಆರೋಪಿಗಳು?

karnataka weather Forecast
ಮಳೆ3 days ago

Karnataka Weather : ಭಾರಿ ಮಳೆಗೆ ಗುಡ್ಡದಿಂದ ಉರುಳಿ ಬಿದ್ದ ಬಂಡೆಗಲ್ಲು; ಬೆಂಗಳೂರಲ್ಲೂ ಸಂಜೆ ವರ್ಷಧಾರೆ

actor Darshan
ಚಿತ್ರದುರ್ಗ3 days ago

Actor Darshan: ರೇಣುಕಾ ಸ್ವಾಮಿ ಕೊಲೆ ಕೇಸ್‌ನಲ್ಲಿ ದರ್ಶನ್‌ ಅರೆಸ್ಟ್‌; ಪ್ರಕರಣವನ್ನು ಸಿಬಿಐಗೆ ವಹಿಸಲು ಒತ್ತಾಯ

Actor Darshan gets a series of questions from the police
ಸಿನಿಮಾ3 days ago

Actor Darshan : ಪವಿತ್ರಗೌಡ ಬಗ್ಗೆ ಪೋಸ್ಟ್‌ ಮಾಡಿದ್ರೆ ನಿಮಗ್ಯಾಕೆ ಕೋಪ? ದರ್ಶನ್‌ಗೆ ಪೊಲೀಸರ ಪ್ರಶ್ನೆಗಳ ಸುರಿಮಳೆ

Actor Darshan
ಸಿನಿಮಾ3 days ago

Actor Darshan : ದರ್ಶನ್‌ ಜೈಲಿಗೆ ಹೋಗುತ್ತಿರುವುದು ಇದೇ ಮೊದಲಲ್ಲ; ನಟನ ಮೇಲಿವೆ ಹತ್ತಾರು ಕೇಸ್‌ಗಳು!

Saptami Gowda
ಸಿನಿಮಾ3 days ago

Saptami Gowda : ಯುವ ಪತ್ನಿ ಶ್ರೀದೇವಿ ವಿರುದ್ಧ ಮಾನಹಾನಿ ಕೇಸ್; ಕಾನೂನು ಹೋರಾಟಕ್ಕೆ ಮುಂದಾದ ನಟಿ ಸಪ್ತಮಿ ಗೌಡ!

Karnataka weather Forecast
ಮಳೆ4 days ago

Karnataka Weather : ಭಾರಿ ಮಳೆಗೆ ಮನೆ ಗೋಡೆ ಕುಸಿದು ಎಮ್ಮೆಗಳು ಸಾವು; ಆಕಳಿನ ಜೀವ ತೆಗೆದ ವಿದ್ಯುತ್‌ ತಂತಿ

ಟ್ರೆಂಡಿಂಗ್‌