Roopa Vs Sindhuri : ಮಾನನಷ್ಟ ಮೊಕದ್ದಮೆ ರದ್ದತಿಗೆ ಹೈಕೋರ್ಟ್‌ ನಕಾರ; IPS ರೂಪಾಗೆ ಭಾರಿ ಹಿನ್ನಡೆ - Vistara News

ಕೋರ್ಟ್

Roopa Vs Sindhuri : ಮಾನನಷ್ಟ ಮೊಕದ್ದಮೆ ರದ್ದತಿಗೆ ಹೈಕೋರ್ಟ್‌ ನಕಾರ; IPS ರೂಪಾಗೆ ಭಾರಿ ಹಿನ್ನಡೆ

Roopa Vs Sindhuri: ಐಪಿಎಸ್‌ ಅಧಿಕಾರಿ ರೂಪಾ ಮತ್ತು ಐಎಎಸ್‌ ಅಧಿಕಾರಿ ರೋಹಿಣಿ ಸಿಂಧೂರಿ ನಡುವಿನ ಕದನ ಕೋರ್ಟ್‌ನಲ್ಲಿ ಬಿಸಿಯೇರು ಸಾಧ್ಯತೆ ಕಂಡುಬಂದಿದೆ. ಮಾನನಷ್ಟ ಮೊಕದ್ದಮೆ ರದ್ದತಿ ಕೋರಿದ ರೂಪಾ ಅವರ ಅರ್ಜಿಯನ್ನು ಕೋರ್ಟ್‌ ತಳ್ಳಿ ಹಾಕಿದೆ.

VISTARANEWS.COM


on

Roopa Moudgil and Rohini Sindhuri
ಮಹತ್ವದ, ಕುತೂಹಲಕರ ಸುದ್ದಿಗಾಗಿ ಫಾಲೊ ಮಾಡಿ
Koo

ಬೆಂಗಳೂರು: ರಾಜ್ಯದಲ್ಲಿ ಭಾರಿ ಸದ್ದು ಮಾಡಿದ್ದ ಐಎಎಸ್‌ ಅಧಿಕಾರಿ ರೋಹಿಣಿ ಸಿಂಧೂರಿ (IAS Officer Rohini Sindhuri) ಮತ್ತು ಐಪಿಎಸ್‌ ಅಧಿಕಾರಿ ರೂಪಾ ಮೌದ್ಗಿಲ್‌ (IPS Officer Roopa Moudgil) ನಡುವಿನ ಸಂಘರ್ಷಕ್ಕೆ (Roopa Vs Sindhuri) ಸೋಮವಾರ ಹೊಸ ತಿರುವು ದೊರೆತಿದೆ. ರೋಹಿಣಿ ಸಿಂಧೂರಿ ಅವರು ಸಲ್ಲಿಸಿದ್ದ ಮಾನನಷ್ಟ ಮೊಕದ್ದಮೆಯನ್ನು (Defamation Case) ರದ್ದು ಮಾಡುವಂತೆ ಕೋರಿ ರೂಪಾ ಅವರು ಸಲ್ಲಿಸಿದ್ದ ಮನವಿಯನ್ನು ರಾಜ್ಯ ಹೈಕೋರ್ಟ್‌ (Karnataka High Court) ರದ್ದು ಮಾಡಿದೆ. ಈ ಮೂಲಕ ರೂಪಾ ಅವರಿಗೆ ಹಿನ್ನಡೆಯಾದಂತಾಗಿದೆ.

ರೂಪಾ ಮೌದ್ಗಿಲ್ ಅವರು ಫೇಸ್‌ಬುಕ್, ಪತ್ರಿಕೆ ಮತ್ತು ವಿದ್ಯುನ್ಮಾನ ಮಾಧ್ಯಮಗಳಲ್ಲಿ ತಮ್ಮ ವಿರುದ್ಧ ಸುಳ್ಳು ಆರೋಪಗಳನ್ನು ಮಾಡುವ ಮೂಲಕ ಮಾನಹಾನಿ ಮಾಡಿದ್ದಾರೆ. ಹಾಗಾಗಿ, ಅವರಿಂದ ಒಂದು ಕೋಟಿ ರೂಪಾಯಿಗಳನ್ನು ಪರಿಹಾರವಾಗಿ ಕೊಡಿಸಬೇಕು. ಅವರ ವಿರುದ್ಧ ಸೂಕ್ತ ದಂಡನೀಯ ಕ್ರಮ ಕೈಗೊಳ್ಳಬೇಕು ಎಂದು ಕೋರಿ ರೋಹಿಣಿ ಸಿಂಧೂರಿ ನಗರದ 24ನೇ ಹೆಚ್ಚುವರಿ ಮುಖ್ಯ ಮೆಟ್ರೊಪಾಲಿಟನ್ ಕೋರ್ಟ್‌ನಲ್ಲಿ ಕ್ರಿಮಿನಲ್ ಮಾನನಷ್ಟ ಮೊಕದ್ದಮೆ ದಾಖಲಿಸಿದ್ದರು. ಇದನ್ನು ಪ್ರಶ್ನಿಸಿ ರೂಪಾ ಮೌದ್ಗಿಲ್‌ ಅವರು ಕೋರ್ಟ್‌ ಮೊರೆ ಹೊಕ್ಕಿದ್ದರು. ನಡುವೆ ಕೆಲವು ವಿಚಾರಣೆಗಳು ನಡೆದು ರೋಹಿಣಿ ಅವರ ವಿರುದ್ಧ ಮಾತನಾಡದಂತೆ, ಯಾವುದೇ ಪೋಸ್ಟ್‌ ಮಾಡದಂತೆ ಆದೇಶ ನೀಡಲಾಗಿತ್ತು. ರೂಪಾ ಅವರು ಅದನ್ನು ಪ್ರಶ್ನಿಸಿದಾಗ ತಡೆಯಾಜ್ಞೆ ತೆರವಾಗಿತ್ತು. ಇದೀಗ ಮಾನನಷ್ಟ ಮೊಕದ್ದಮೆಯನ್ನೇ ರದ್ದುಪಡಿಸಬೇಕೆಂಬ ಅರ್ಜಿಯ ವಿಚಾರಣೆ ನಡೆದು ಮನವಿಯನ್ನು ರದ್ದು ಮಾಡಿದೆ. ಹೀಗಾಗಿ ಮುಂದಿನ ವಿಚಾರಣೆ ಪ್ರಕ್ರಿಯೆಗೆ ವೇದಿಕೆ ಸಿದ್ಧವಾದಂತಾಗಿದೆ.

ಪ್ರಕರಣದಲ್ಲಿ ಈಗಾಗಲೇ ರೂಪಾ ಅವರಿಗೆ ಸಮನ್ಸ್‌ ನೀಡಲಾಗಿತ್ತು. ಅದರ ರದ್ದತಿಗೂ ರೂಪಾ ಮನವಿ ಮಾಡಿದ್ದರು. ಕೋರ್ಟ್‌ ಅದನ್ನು ನಿರಾಕರಿಸಿದ್ದರು. ಈಗ ಮಾನನಷ್ಟ ಮೊಕದ್ದಮೆ ರದ್ದತಿಯ ಬೇಡಿಕೆಯೂ ಹೈಕೋರ್ಟ್‌ನಲ್ಲಿ ತಳ್ಳಿ ಹಾಕಲ್ಪಟ್ಟಿದೆ. ಹೀಗಾಗಿ ಮುಂದಿನ ಮಾನನಷ್ಟ ಮೊಕದ್ದಮೆ ಪ್ರಕರಣದ ವಿಚಾರಣೆ ಕುತೂಹಲ ಕೆರಳಿಸಿದೆ.

ಏನಿದು ಐಎಎಸ್‌ ವರ್ಸಸ್‌ ಐಪಿಎಸ್‌ ಜಗಳ?

ಐಪಿಎಸ್‌ ಅಧಿಕಾರಿಯಾಗಿರುವ ರೂಪಾ ಅವರು 2023ರ ಫೆಬ್ರವರಿ 18 ಮತ್ತು 19ರಂದು ತಮ್ಮ ಫೇಸ್‌ಬುಕ್ ಅಕೌಂಟ್‌ನಲ್ಲಿ ರೋಹಿಣಿ ಸಿಂಧೂರಿ ಅವರ ಬಗ್ಗೆ ಸಾಲು ಸಾಲು ಆರೋಪಗಳನ್ನು ಮಾಡಿದ್ದರು. ರೋಹಿಣಿ ಸಿಂಧೂರಿ ಅವರು ಮನೆ ಹಾಳು ಕೆಲಸ ಮಾಡುತ್ತಿದ್ದಾರೆ. ಜಿಲ್ಲಾಧಿಕಾರಿಯಾಗಿದ್ದ ಡಿ.ಕೆ. ರವಿ ಅವರ ಸಾವನ್ನೂ ತಳುಕು ಹಾಕಿದ ರೂಪಾ ಅವರು ಇತರ ಐಎಎಸ್‌ ಅಧಿಕಾರಿಗಳಿಗೆ ಅಸಭ್ಯ ಚಿತ್ರಗಳನ್ನು ರಾತ್ತಿ ಹೊತ್ತು ಕಳುಹಿಸುತ್ತಿದ್ದಾರೆ. ಬೇರೆ ಐಎಎಸ್‌ ಅಧಿಕಾರಿಗಳ ಮನೆ ಒಡೆಯಲು ಯತ್ನಿಸುತ್ತಿದ್ದಾರೆ ಎಂದು ಆರೋಪಿಸಿದ್ದರು.

ಇದು ಭಾರಿ ಸಂಚಲನವನ್ನು ಸೃಷ್ಟಿಸಿತ್ತು. ಇದರ ವಿರುದ್ಧ ರೋಹಿಣಿ ಸಿಂಧೂರಿ ಅವರು ಕೋರ್ಟ್‌ ಮೆಟ್ಟಿಲು ಹತ್ತಿದ್ದರು. ಈ ನಡುವೆ, ರಾಜ್ಯ ಸರ್ಕಾರ ಇಬ್ಬರೂ ಅಧಿಕಾರಿಗಳಿಗೆ ಎಚ್ಚರಿಕೆ ನೀಡಿದ್ದಲ್ಲದೆ, ಅವರನ್ನು ಸೇವೆಯಿಂದ ಮುಕ್ತಿಗೊಳಿಸಿ ರಜೆ ಮೇಲೆ ಕಳುಹಿಸಿತ್ತು. ಇದೀಗ ವಾದ-ವಿವಾದಗಳ ಹಂತ ಮುಗಿದು ಇನ್ನು ರೂಪಾ ಮೌದ್ಗಿಲ್‌ ವಿಚಾರಣೆ ಎದುರಿಸಬೇಕಾಗಿದೆ.

ರೂಪಾ ಏನೇನು ಆರೋಪ ಮಾಡಿದ್ದರು?

1. ರೋಹಿಣಿ ಸಂಧಾನಕ್ಕೆ ಹೋಗಿದ್ದಾರೆ ಅಂದರೆ ಏನರ್ಥ?

ರೋಹಿಣಿ ಸಿಂಧೂರಿ ಅವರು ಶಾಸಕ ಸಾರಾ ಮಹೇಶ್ ಅವರ ಬಳಿ ಸಂಧಾನಕ್ಕೆ ಹೋಗಿದ್ದರು ಎಂಬ ಸುದ್ದಿ ವೈರಲ್‌ ಆಗಿದೆ. ಸಂಧಾನಕ್ಕೆ ಹೋಗುವುದು ಅಂದರೆ ಅರ್ಥ ಏನು? ಯಾವ ಐಎಎಸ್ ಅಧಿಕಾರಿ ಕೂಡ ಎಂಎಲ್ಎ ಅಥವಾ ರಾಜಕೀಯ ವ್ಯಕ್ತಿಗಳ ಜೊತೆ, ತಾವು ನಿರ್ವಹಿಸಿದ ಕರ್ತವ್ಯ ನಿಮಿತ್ತ ಸಂಧಾನಕ್ಕೆ ಹೋಗಿದ್ದು ನಾನು ಇದೇ ಮೊದಲು ಕೇಳಿದ್ದು. ಹಾಗಾದರೆ, ರೋಹಿಣಿ ಸಿಂಧೂರಿ ಐಎಎಸ್ ಸಂಧಾನಕ್ಕೆ ಹೋಗಿದ್ದು ಯಾಕೆ? ಆಕೆ ಏನನ್ನು ಮುಚ್ಚಿಕೊಳ್ಳುವ ಪ್ರಯತ್ನ ನಡೆಸಿದ್ದಾರೆ? ತಮ್ಮ ಕರ್ತವ್ಯ ಲೋಪದ ಬಗ್ಗೆಯೋ, ತಮ್ಮ ಭ್ರಷ್ಟಾಚಾರ ಬಗ್ಗೆಯೋ ಏನು?

2. ಡಿ.ಕೆ. ರವಿ ಜತೆಗಿನ ಚಾಟ್ಸ್‌ನಲ್ಲಿ ಎಲ್ಲವೂ ಇದೆ

ಐಎಎಸ್‌ ಅಧಿಕಾರಿಯಾಗಿದ್ದ ಡಿ.ಕೆ. ರವಿ ಸಂಭಾವಿತ ವ್ಯಕ್ತಿ. ಸಿಬಿಐ ವರದಿಯಲ್ಲಿ ಅವರಿಬ್ಬರ ಚಾಟ್ಸ್ (ಮಾತುಕತೆ) ಬಗ್ಗೆ ಉಲ್ಲೇಖ ಇದ್ದು, ರವಿ ಅವರು ಎಂದಾದರೂ ಲಿಮಿಟ್‌ ಕ್ರಾಸ್ ಮಾಡಿದ ತಕ್ಷಣವೇ ಅವರನ್ನು ಬ್ಲಾಕ್ ಮಾಡಬಹುದಿತ್ತು. ಪರ್ಮನೆಂಟ್ ಆಗಿ ಬ್ಲಾಕ್ ಮಾಡಲಿಲ್ಲ ಈಕೆ. ಬ್ಲಾಕ್ ಮಾಡದೆ ಇದ್ದದ್ದು ಉತ್ತೇಜನ ಕೊಡುವ ಹಾಗೆ ಎಂಬಂತೆಯೇ ಕಾಣುತ್ತದೆ ಎಂಬುದು ಅನೇಕರ ಅಭಿಪ್ರಾಯ.‌

3. ಮಂಡ್ಯ ಸಿಇಒ ಆಗಿದ್ದಾಗ ಟಾಯ್ಲೆಟ್ಸ್‌ ಬಗ್ಗೆ ನಕಲಿ ಲೆಕ್ಕ ಕೊಟ್ಟರು!

ರೋಹಿಣಿ ಸಿಂಧೂರಿ ಅವರು ಮಂಡ್ಯ ಜಿಲ್ಲಾ ಪಂಚಾಯಿತಿ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಆಗಿದ್ದಾಗ ಅವರು ಕಟ್ಟಿಸಿದ ಟಾಯ್ಲೆಟ್‌ಗಿಂತ ಹೆಚ್ಚು ತೋರಿಸಿ figures fudge ಮಾಡಿ ಕೇಂದ್ರ ಸರ್ಕಾರದ ಪ್ರಶಸ್ತಿ ತೆಗೆದುಕೊಂಡರು ಎಂಬ ಆರೋಪ ಕೇಳಿ ಬಂತು. ಅದರ ತನಿಖೆಯೇ ಆಗಲಿಲ್ಲ.

4. ಆಕ್ಸಿಜನ್‌ ಇಲ್ಲದೆ 24 ಮಂದಿ ಸತ್ತ ಆಪಾದನೆಯಿಂದ ಹೇಗೋ ಪಾರು

ಚಾಮರಾಜನಗರ 24 ಜನರು ಆಮ್ಲಜನಕ ಇಲ್ಲದೇ ಸತ್ತಾಗ, ಆಪಾದನೆಗಳು ಇವರ ಮೇಲೇ ನೇರವಾಗಿ ಬಂತು. ಅದರಿಂದ ಹೇಗೋ ಪಾರಾದರು.

5. ಶಿಲ್ಪಾ ನಾಗ್‌ ಅವರ ಜತೆ ಜಗಳ ಯಾಕೆ?

ಮೈಸೂರಿನಲ್ಲಿ ಅಧಿಕಾರಿಯಾಗಿದ್ದ ಕನ್ನಡದ ಹುಡುಗಿ ಶಿಲ್ಪಾ ನಾಗ್ ಅವರ ಜೊತೆ ಜಗಳ, ರಂಪ ಯಾತಕ್ಕಾಗಿ? ಅಲ್ಲಿ ಯಾವುದೇ ಮೌಲ್ಯಾಧಾರಿತ ವಸ್ತು ವಿಷಯ ಇರಲಿಲ್ಲ. ಬರೀ ಕೋಳಿ ಜಗಳ. ಶಿಲ್ಪಾ ಅವರು ಹೆಚ್ಚು ಕೆಲಸ ಮಾಡಿದ್ದರು. ಅವರ ಬಗ್ಗೆ ಮಾಧ್ಯಮಗಳಲ್ಲಿ ಹೆಚ್ಚು ಪಾಸಿಟೀವ್‌ ಸುದ್ದಿಗಳು ಬಂದಿದ್ದರಿಂದ ಅದನ್ನು ಸಹಿಸಿಕೊಳ್ಳಲಾಗದೆ ಶಿಲ್ಪಾಗೆ ಹೆರೇಸ್‌ಮೆಂಟ್‌ ಮಾಡಿದರು ಎಂದು ಕೆಲವರು ಹೇಳಿದರು. ಕಡೆಗೆ ಮೈಸೂರಲ್ಲಿ ಗೌಡ ಸಮುದಾಯದ ಪತ್ರಕರ್ತರು ಅವರಿಗೆ ಜಾತಿ ಬೆಂಬಲ ನೀಡುತ್ತಿದ್ದಾರೆ ಎಂಬ ಮಟ್ಟಿಗೆ ಸ್ವತಃ ಇಲ್ಲದ ಜಾತೀಯತೆ ಮೈಸೂರಿನ ಜರ್ನಲಿಸ್ಟ್‌ಗಳಲ್ಲಿ ಬಿತ್ತಿದರು ಈಕೆ ಎಂದು ಅನೇಕರು ಹೇಳುತ್ತಾರೆ.

6. ಹರ್ಷ ಗುಪ್ತ ಅವರ ಜತೆಗೂ ಜಗಳ ಅಂದರೆ..

ಹರ್ಷ ಗುಪ್ತ ಅವರು ಅತ್ಯಂತ ಪ್ರಾಮಾಣಿಕ ಅಧಿಕಾರಿ. ಅವರ ಜೊತೆ ಜಗಳ ಮಾಡಿದ್ದಾರೆ. ಎಲ್ಲಾ ಐಎಎಸ್ ಅಧಿಕಾರಿಗಳಿಗೆ ಈ ವಿಷಯ ಗೊತ್ತಿದೆ.

7. ಮಣಿವಣ್ಣನ್‌ ಅಜಾತಶತ್ರು, ಅವರ ಜತೆಗೂ ಜಗಳ ಅಂದ್ರೆ..

ಮಣಿವಣ್ಣನ್ ಐಎಎಸ್ ಜೊತೆ ಲೇಬರ್/ ಕಾರ್ಮಿಕ ಇಲಾಖೆಯಲ್ಲಿ ಇದ್ದಾಗ ಜಗಳ ಮಾಡಿದ್ದು ಜಗಜನಿತ. ಮಣಿವಣ್ಣನ್ ಒಂದು ರೀತಿ ಅಜಾತಶತ್ರು. ಅಂಥದರಲ್ಲಿ…ಅವರ ಜೊತೆಗೂ ಜಗಳ ಮಾಡಿಕೊಂಡಿದ್ದಾರೆ.

8. ಡಿ.ಕೆ. ರವಿ ಮಾತ್ರವಲ್ಲ ಹರೀಶ್‌ ಆತ್ಮಹತ್ಯೆಗೂ ಲಿಂಕ್‌!

ಡಿ.ಕೆ ರವಿ ತೀರಿಕೊಂಡ ಕೆಲವು ತಿಂಗಳು ಮುಂಚೆ ಕನ್ನಡದ ಹುಡುಗ, ಐಎಎಸ್‌ ಅಧಿಕಾರಿ ಎನ್‌. ಹರೀಶ್ ಇವರ ಬ್ಯಾಚ್‌ಮೇಟ್‌. ಮದುವೆ ಆಗಿರಲಿಲ್ಲ ಆತ. ಈಕೆಗಾಗಿ ಕಾದು ಕಾದು ಆತ ಆತ್ಮಹತ್ಯೆ ಮಾಡಿಕೊಂಡದ್ದು ಎಂದು ಹಲವರು ಹೇಳಿದರೂ ನಾನು ಅದನ್ನು ನಂಬಲಿಲ್ಲ, ಈಗಲೂ ನಂಬಿಲ್ಲ.

9. ಮಹೇಶ್‌ ವಿರುದ್ಧದ ಒಂದು ಆರೋಪಕ್ಕೂ ಪ್ರೂಫ್‌ ನೀಡಿಲ್ಲ

ಕೆ.ಆರ್‌. ನಗರ ಶಾಸಕ ಸಾ.ರಾ ಮಹೇಶ್‌ ಅವರ ಮೇಲೆ ಅನೇಕ ಆಪಾದನೆಗಳನ್ನು ಮಾಡಿದ ಈಕೆ ಒಂದನ್ನೂ ಪ್ರೂವ್ ಮಾಡಲಿಲ್ಲ. ಅದಕ್ಕೇ ಸಂಧಾನಕ್ಕೆ ಹೋದರಾ?

10. ಪ್ರತಾಪ್‌ ಸಿಂಹ ಅವರ ಮೇಲೂ ನಿರಾಧಾರ ಆರೋಪ

ಮೈಸೂರು ಸಂಸದ ಪ್ರತಾಪ್ ಸಿಂಹ ಮೇಲೆ ಕೂಡ ಅನೇಕರ ಬಳಿ ಈಕೆ ಪ್ರೂವ್‌ ಮಾಡಲಾರದ ಆಪಾದನೆಗಳನ್ನು ಮಾಡಿದರು. ಅಂದರೆ, ಪ್ರತಾಪ್ ಸಿಂಹ ಅವರು ಖಾಸಗಿ ಕ್ಲಿನಿಕ್‌ಗಳಿಗೆ ಆಮ್ಲಜನಕ ಕೇಳುತ್ತಾ ತಮ್ಮ ಸ್ವಂತ ಲಾಭಕ್ಕೆ ನಿಂತಿದ್ದಾರೆ ಎಂಬ ನಿರಾಧಾರ ಆರೋಪ ಮಾಡಿದರು. ನಿಜ ಇದ್ದಿದ್ದೇ ಆದರೆ ಅದನ್ನು ಪ್ರೂವ್‌ ಯಾಕೆ ಮಾಡಲಿಲ್ಲ?

11. ಹಾಸನದಿಂದ ಎತ್ತಂಗಡಿ ಮಾಡಿದಾಗ ಅರ್ಜಿ ಬರೆದುಕೊಟ್ಟಿದ್ದು ನನ್ನ ಗಂಡ

ಹಾಸನದಲ್ಲಿ ತನ್ನನ್ನು ಒಂದು ವರ್ಷದ ಒಳಗೆ ಎತ್ತಂಗಡಿ ಮಾಡಿದ ಸರ್ಕಾರದ ವಿರುದ್ಧ CATಯಲ್ಲಿ (Central administrative tribunal) ದಾವೆ ಹೂಡಿದರು. ಆ ದಾವೆಗೆ ಅರ್ಜಿ ಬರೆದುಕೊಟ್ಟಿದ್ದೇ ನನ್ನ ಪತಿ ಮೌನೀಶ್‌ ಮುದ್ಗಿಲ್‌ ಅವರು. ನನ್ನೆದುರಿಗೆ ಬರೆದು ಬರೆದು ಆಕೆಗೆ, ಆಕೆಯ ತಂದೆಗೆ, ಲಾಯರ್‌ಗೆ ಕಳಿಸಿದ್ದರು. ಆದರೆ ಈಕೆ, ಮೈಸೂರು ಡಿಸಿ ಆಗಿ ಹೋದದ್ದು ಹೇಗೆ? ತನಗಿಂತ ಕೇವಲ 29 ದಿನ ಮುಂಚೆ ಮೈಸೂರಿಗೆ ಡಿಸಿ ಎಂದು ವರ್ಗಾವಣೆ ಆಗಿದ್ದ ಕನ್ನಡ ಹುಡುಗ ಶರತ್ ಅವರನ್ನು ಒಕ್ಕಲೆಬ್ಬಿಸಿದ್ದು ನ್ಯಾಯವೇ? ತನ್ನಂತೆ ಪರರು ಎಂಬ ಭಾವನೆ ಇಲ್ಲವೇಕೆ? 29 ದಿನದಲ್ಲಿ ಯಾವುದೇ ಕಳಂಕ, ಆರೋಪ ಇಲ್ಲದ ಶರತ್ ಅವರನ್ನು ರಿಪ್ಲೇಸ್‌ ಮಾಡಿದ್ದು ಈಕೆ ಯಾವ ಉನ್ನತ ಮಟ್ಟದ ಪ್ರಭಾವದಿಂದ?

11. ಕೊರೊನಾ ಟೈಮಲ್ಲಿ ಪಾರಂಪರಿಕ ಕಟ್ಟಡಕ್ಕೆ ಟೈಲ್ಸ್‌ ಹಾಕಿದ್ದು ಸರಿನಾ?

ಐಎಎಸ್‌ ಅಧಿಕಾರಿ ಡಾ. ರವಿಶಂಕರ್‌ ಈಕೆಯ ಮೇಲೆ ಪ್ರಾಥಮಿಕ ತನಿಖೆಯಲ್ಲಿ ತಪ್ಪು ಮಾಡಿರುವುದು ಸಾಬೀತಾಗಿದೆ. ಮೈಸೂರಿನ ಡಿಸಿ ಮನೆ, ಪಾರಂಪರಿಕ ಕಟ್ಟಡ ಅಂತಾ ಇದ್ದರೂ ಅಲ್ಲಿ ಟೈಲ್ಸ್ ಹಾಕಿದ್ದು, ಸ್ವಿಮ್ಮಿಂಗ್ ಪೂಲ್ ಮಾಡಿದ್ದು ಸರಿಯಾ? ಮನುಷ್ಯತ್ವ ಇರೋರು ಕೋವಿಡ್‌ ಸಮಯದಲ್ಲಿ ಜನ ಸಾಯುತ್ತಿರುವಾಗ ಸ್ವಿಮ್ಮಿಂಗ್ ಪೂಲ್ ಕಟ್ಟಿಸಿಕೊಳ್ತಾರಾ? John was fiddling when Rome was burning ಅಂದ ಹಾಗೆ. Marie Antoinette ಎಂಬ ರಾಣಿ ಜನರು ಬ್ರೆಡ್‌ (ಆಹಾರ) ಇಲ್ಲದೆ ಸಾಯ್ತ್ತಿದ್ದಾರೆ ಅಂತ ಕೇಳಿಸಿಕೊಂಡಾಗ, ಬ್ರೆಡ್‌ ಇಲ್ಲದೆ ಇದ್ದರೆ ಏನು, ಜನರು ಕೇಕ್‌ ತಿನ್ನಲಿ ಅಂದಳಂತೆ. ಆ ರಾಣಿಯ ನೆನಪಾಯಿತು.

Rohini sindhuri Roopa
#image_title

12. ಆಗದವರ ಮೇಲೆ ಸೋಷಿಯಲ್ ಮೀಡಿಯಾ ಟ್ರೋಲ್

ಹಿಂದೆ ನನಗೆ ಒಬ್ಬರು ಮೆಸೇಜ್ ಮಾಡಿ ತಾವು ರೋಹಿಣಿ ಸಿಂಧೂರಿ ಪರವಾಗಿ ಸೋಷಿಯಲ್‌ ಮೀಡಿಯಾ ಹ್ಯಾಂಡ್ಲ್‌ ಮಾಡುವ ಏಜೆನ್ಸಿ ಒಂದರಲ್ಲಿ ಕೆಲಸ ಮಾಡುತ್ತಿದ್ದುದನ್ನು ತಿಳಿಸಿದರು. ಅಲ್ಲಿ ಹೇಗೆ ಈಕೆಯ ಪರವಾಗಿ ಸುದ್ದಿ, ಫೋಟೊ, ವಿಡಿಯೊ ಕ್ರಿಯೇಟ್‌ ಮಾಡುತ್ತಾರೆ, ಹೇಗೆ ಈಕೆಯ ವಿರುದ್ಧ ಇರುವವರನ್ನು ಟ್ರೋಲ್ ಮಾಡುವ ಕಂಟೆಂಟ್‌ ಹಾಗೂ ಹ್ಯಾಂಡಲ್ ಗಳು ತಯಾರಾಗುತ್ತವೆ ಎಂಬುದು ಹೇಳಿದ್ದರು. ನಾನು ಅದನ್ನು ಫೇಸ್ಬುಕ್ ನಲ್ಲಿಯೂ ಹಾಕಿದ್ದೆ.

‌13. ಅಗ್ಗದ ಬ್ಯಾಗ್‌ ಹೆಚ್ಚು ಬೆಲೆಗೆ ಮಾರಾಟ: ತನಿಖೆಗೆ ಅನುಮತಿ ನಿರಾಕರಿಸಿದ್ದೇಕೆ ಸರಕಾರ?

ಈಕೆಯ ಮೇಲೆ ಅಗ್ಗದ ಬ್ಯಾಗ್‌ಗಳನ್ನು ಅತಿ ಹೆಚ್ಚು ಬೆಲೆಗೆ ಮಾರಾಟ ಮಾಡಿರುವ ದೂರು ಲೋಕಾಯುಕ್ತದಲ್ಲಿ ನೋಂದಣಿ ಆಗಿದ್ದು, ಅದರ ತನಿಖೆ ಕೈಗೆತ್ತಿಕೊಳ್ಳಲು ಲೋಕಾಯುಕ್ತ ಈಗಾಗಲೇ ಸರ್ಕಾರಕ್ಕೆ ಬರೆದಿದೆ. ಆದರೆ ಸರ್ಕಾರ ಮಟ್ಟದಲ್ಲಿ ಕಾರಣ ಕೊಡದೆ ಆಕೆಯನ್ನು ತನಿಖೆಗೆ ಒಳಪಡಿಸಲು ಅನುಮತಿ ನಿರಾಕರಣೆ ಮಾಡಲಾಗಿದೆ. ಅದರ ಪ್ರತಿ ನನ್ನ ಬಳಿ ಇದೆ. ಸಾಮಾನ್ಯವಾಗಿ ಅಧಿಕಾರಿಗಳಿಗೆ ಈ ರೀತಿಯ ಬೆಂಬಲ ಇರುತ್ತದೆಯೇ?

14. ಐಎಎಸ್‌ ಅಧಿಕಾರಿಗಳಿಗೆ ಅಸಭ್ಯ ಚಿತ್ರ ಕಳುಹಿಸುವ ರೋಹಿಣಿ ಸಿಂಧೂರಿ!

ಈಕೆ ಕೆಲವು ಐಎಎಸ್ ಅಧಿಕಾರಿಗಳಿಗೆ ಒಂದಲ್ಲ, ಎರಡಲ್ಲ ಅನೇಕರಿಗೆ ತನ್ನ ಅಷ್ಟೇನೂ ಸಭ್ಯವಲ್ಲದ ಚಿತ್ರಗಳನ್ನು ಕಳಿಸಿರುವ ಹಾಗೂ ಅವರನ್ನು ಉತ್ತೇಜಿಸುವ ಕಾರ್ಯ ಮಾಡಿರುವ ಆಪಾದನೆ ಇದೆ. ಆ ಚಿತ್ರಗಳು ನನಗೆ ಸಿಕ್ಕಿವೆ. ಇದು ಖಾಸಗಿ ವಿಷಯ ಆಗುವುದಿಲ್ಲ. All India service conduct rules ಪ್ರಕಾರ ಹಿರಿಯ ಅಧಿಕಾರಿಗಳು ಈ ರೀತಿಯ ಚಿತ್ರಗಳನ್ನು ಕಳುಹಿಸುವುದು, ಸಂಭಾಷಣೆ ಮಾಡುವುದು ಅಪರಾಧ. ಈ ಆಪಾದನೆಗಳನ್ನು ಸರ್ಕಾರ ತನಿಖೆ ಮಾಡುವುದೇ, ನೋಡಬೇಕಿದೆ. ಏಕೆಂದರೆ ಸತ್ಯಾಸತ್ಯತೆ ಹೊರ ಬರಬೇಕಿದೆ.

15. ಲಕ್ಕಿ ಅಲಿ ಕಾರ್ಯಕ್ರಮಕ್ಕೆ ರೌಡಿಗಳನ್ನು ಕಳುಹಿಸಿದರು

ಮೊನ್ನೆ ಇವರ ಭಾವ ಮಧುಸೂಧನ್ ರೆಡ್ಡಿ ಅವರು, ಲಕ್ಕಿ ಆಲಿ ಎಂಬ ಗಾಯನ ಆಯೋಜನೆ ಆಗಿದ್ದ ಜಾಗಕ್ಕೆ 20 – 30 ಜನ ಕರೆದುಕೊಂಡು ಹೋಗಿ ರೌಡಿಸಂ ಮಾಡಿರುವ ವಿಷಯ ಮಾಧ್ಯಮಗಳಲ್ಲಿ ಬಂತು. ಈಕೆಯು ತನ್ನ ಐಎಎಸ್ ಪ್ರಭಾವ ಬಳಸಿ ದುರುಪಯೋಗ ಮಾಡಿಕೊಂಡು ಇರುವುದಾಗಿ ಲಕ್ಕಿ ಆರೋಪ ಮಾಡಿದರು. ವ್ಯಾಜ್ಯದ ಜಮೀನಿಗೆ 20-30 ಜನ ಕರೆದುಕೊಂಡು ಹೋಗಿ ಕಾನೂನು ಕೈಗೆ ತೆಗೆದುಕೊಳ್ಳಬಹುದು? ಈ ರೀತಿಯ ಭಂಡ ಧೈರ್ಯ ಎಲ್ಲಿಂದ ಬರುತ್ತದೆ? ಐಎಎಸ್ ಅಧಿಕಾರದಿಂದ?

16. ಗಂಡ, ಮಾವನಿಗೆ ಭೂ ಸಂಬಂಧಿ ದಾಖಲೆ ಕೊಡುತ್ತಾರೆ..

ಇವರ ಗಂಡ ಹಾಗೂ ಇವರ ಮಾವನವರು (ಈಗ ತೀರಿ ಹೋಗಿದ್ದಾರಂತೆ) ರಿಯಲ್‌ ಎಸ್ಟೇಟ್‌ ಬ್ಯುಸಿನೆಸ್ ನಡೆಸುತ್ತಾರೆ. ಅನೇಕ ಬಾರಿ ಸರ್ವೇ ಹಾಗೂ ಭೂ ದಾಖಲೆ ಕಚೇರಿಯ ಮೂಲಕ ತನ್ನ ಕೌಟುಂಬಿಕ ವ್ಯವಹಾರಕ್ಕೆ ಅಗತ್ಯ ಇರುವ ಅನೇಕ ಭೂಸಂಬಂಧಿ ಮಾಹಿತಿ ಅಂದರೆ, ಒಂದು ಭೂಮಿಯ ಫೋಡಿ, ಇನ್ನೊಂದರ ಬಗ್ಗೆ ಅದು ವ್ಯಾಜ್ಯ ಇರುವ ಭೂಮಿಯೇ ಅಥವಾ ಖರೀದಿಸಲು ಯೋಗ್ಯವೇ ಎಂಬಂತಹ ಮಾಹಿತಿಗಳನ್ನು ತಮ್ಮ ಐಎಎಸ್ ಸ್ಥಾನ ಅಧಿಕಾರದಿಂದ ಪಡೆದು ಕೊಂಡಿರುವ ಮಾಹಿತಿ ದಾಖಲೆ ಸಮೇತ ಇದ್ದು, ಇದರ ಮೇಲೆ ಕ್ರಮ ಆಗುತ್ತದೆಯೇ? ನೋಡಬೇಕು.

ಇದನ್ನೂ ಓದಿ: Sindhuri vs Roopa: ಕ್ಷಮೆ ಕೇಳದಿದ್ದರೆ 1 ಕೋಟಿ ರೂಪಾಯಿ ಮಾನನಷ್ಟ ಮೊಕದ್ದಮೆ; ರೂಪಾಗೆ ರೋಹಿಣಿ ಲೀಗಲ್ ನೋಟಿಸ್‌

17. ನನ್ನ ವರ್ಗಾವಣೆ ಆದಾಗ ಯಾರೂ ನೆರವಿಗೆ ಬರಲಿಲ್ಲ ಯಾಕೆ?

ಅನೇಕ ಬಾರಿ ಸರ್ಕಾರ ಅಧಿಕಾರಿಗಳನ್ನು ವರ್ಗಾವಣೆ ಮಾಡಿದಾಗ ಆ ಜಾಗದಲ್ಲಿ ಇದ್ದವರು ಕ್ಯಾಟ್/ಕೋರ್ಟ್ ಗೆ ಹೋಗುವುದು ಸಹಜ. ನಾನು 3 ವರ್ಷ ದೂರದ ಯಾದಗಿರಿಯಲ್ಲಿ ಕೆಲಸ ಮಾಡಿ,( senior most sp in the state, 2013ರಲ್ಲಿ ನಾನು) ಬೆಂಗಳೂರಿಗೆ ನನಗೆ ವರ್ಗವಾದಾಗ, ಆ ಜಾಗದಲ್ಲಿ ಇದ್ದ ಅಧಿಕಾರಿ ಪವಾರ್ ಅವರು ನನ್ನ ವರ್ಗಾವಣೆ ಪ್ರಶ್ನಿಸಿ ಕ್ಯಾಟ್ ಗೆ ಹೋದರು. ಆದರೆ, ರೋಹಿಣಿ ಸಿಂಧೂರಿ ಗೆ ಸಾಕ್ಷಾತ್ ಅಡ್ವೊಕೇಟ್ ಜನರಲ್ ಅವರೇ ಬಂದು ವಾದ ಮಾಡಿದರಲ್ಲ, ಮೈಸೂರು ಡಿಸಿ ವರ್ಗಾವಣೆ ವಿಷಯದಲ್ಲಿ, ಆ ಸೌಲಭ್ಯ ನನಗೇಕೆ ಸಿಗಲಿಲ್ಲ? ನನ್ನಂತಹ ಕನ್ನಡಿಗ ಅಧಿಕಾರಿಗಳು, ಹೇಗೆ ನಡೆಸಿ ಕೊಂಡರೂ ಸುಮ್ಮನೆ ಇರ್ತಾರೆ ಅಂತಲೇ? ಸ್ವತಃ ಅಡ್ವೊಕೇಟ್ ಜನರಲ್ ಹಾಜರಾಗಿ ವಾದ ಮಾಡಿದ್ದು ಈಕೆಗಲ್ಲದೆ ಮತ್ಯಾವ ಅಧಿಕಾರಿಗೂ ಈ ಸೌಲಭ್ಯ ಸಿಕ್ಕಿಲ್ಲ. ಯಾಕೆ ಈ ತಾರತಮ್ಯ ಧೋರಣೆ?

18. ಇವರಿಂದಾಗಿ ಜಿಲ್ಲಾಧಿಕಾರಿ ಸಂಸಾರವೇ ಬೇರ್ಪಟ್ಟಿದೆ!

ಈಕೆ ಪ್ರೊಬೇಷನರಿ ಅಂತ ಇದ್ದಾಗ, ಅಲ್ಲಿಯ ಡಿಸಿ ಹಾಗೂ ಅವರ ಪತ್ನಿ ನೆರೆಯ ಜಿಲ್ಲೆಯ ಜಿಲ್ಲಾಧಿಕಾರಿ ಇವರಿಬ್ಬರ ಸಂಸಾರದಲ್ಲಿ ಹುಳಿ ಬಿದ್ದು ಅವರು ಬೇರ್ಪಟ್ಟಿದ್ದಾರೆ ಹಾಗೂ ಇದು ಈಕೆಯ ದೆಸೆಯಿಂದ ಎಂಬ ಮಾತು ಅನೇಕರ ಬಾಯಲ್ಲಿ ಕೇಳಿದ್ದೇನೆ.

ಇದನ್ನೂ ಓದಿ: Sindhuri Vs Roopa : ವಿವಾದದ ಬಿಸಿ ಏರಿಸಿದ್ದ ಡಿ. ರೂಪಾ IPS ಈಗ ಫಾರಿನ್‌ನಲ್ಲಿ ತಣ್ಣಗಿದ್ದಾರೆ!

19. ಜಾಲಹಳ್ಳಿ ಮನೆಯ ದಾಖಲೆ ಕೊಟ್ಟೇ ಇಲ್ಲ!

ಜಾಲಹಳ್ಳಿಯಲ್ಲಿ ಈಕೆ (ಪತಿಯದ್ದು ಇದ್ದರೂ ಈಕೆಯದೂ ಆಗುತ್ತದೆ) ದೊಡ್ಡ ಮನೆ ಒಂದು ಕಟ್ಟುತ್ತಿದ್ದು, ಐಎಎಸ್ ಅಧಿಕಾರಿ ಸಲ್ಲಿಸಬೇಕಾದ immovable property returnsನಲ್ಲಿ ಈ ಮನೆಯ ಉಲ್ಲೇಖ ಇಲ್ಲ. ಬದಲಾಗಿ ಬೇರೆಲ್ಲಾ ಲಂಗು ಲೊಟ್ಟು ಆಸ್ತಿ ಬಗ್ಗೆ ವರದಿ ಕೊಟ್ಟಿದ್ದಾರೆ. ಆ ಮನೆಗೆ ಕೋಟಿಗಟ್ಟಲೆ ಇಟಲಿ ಫರ್ನಿಚರ್‌, 26 ಲಕ್ಷದ ಜರ್ಮನ್ ಗೃಹೋಪಯೋಗಿ ವಸ್ತುಗಳು (ಅದನ್ನು duty free ಮಾಡಿಸಿಕೊಳ್ಳುವ ಬಗ್ಗೆ ಚರ್ಚೆ ಇದೆ) ತರಿಸಿಕೊಂಡಿದ್ದಾರೆ. ಆರು ಲಕ್ಷ ಕೇವಲ ಬಾಗಿಲಿನ ಹಿಡಿಕೆಗಳಿಗೆ ಖರ್ಚು ಮಾಡಿರುವ ಬಗ್ಗೆ ಈಕೆ ಮಾಡಿರುವ ಚಾಟ್‌ಗಳ ಮಾಹಿತಿ ಸರ್ಕಾರಕ್ಕೆ ಸಿಕ್ಕಿದೆ. ಇದರ ಮೇಲೆ ಕೂಲಂಕಷ ತನಿಖೆ ಆಗುವುದೇ ನೋಡಬೇಕಿದೆ.

ಕ್ಷಣ ಕ್ಷಣದ ಮಾಹಿತಿಗಾಗಿ Vistara News FaceBook ಪೇಜ್ ಫಾಲೋ ಮಾಡಿ
ಮಹತ್ವದ ಮಾಹಿತಿಗಾಗಿ ವಿಸ್ತಾರ ನ್ಯೂಸ್ ಆ್ಯಪ್ ಉಚಿತವಾಗಿ ಡೌನ್ ಲೋಡ್ ಮಾಡಿಕೊಳ್ಳಿ: Andriod App | IOS App

ಪ್ರಮುಖ ಸುದ್ದಿ

Rahul Gandhi: ಮಾನನಷ್ಟ ಮೊಕದ್ದಮೆ ವಿಚಾರಣೆಗೆ ಹಾಜರಾಗಲು ಬೆಂಗಳೂರಿಗೆ ಆಗಮಿಸಿದ ರಾಹುಲ್‌ ಗಾಂಧಿ

ಮಾನನಷ್ಟ ಮೊಕದ್ದಮೆ ವಿಚಾರಣೆಗೆ ಆಗಮಿಸಿದ ಕಾಂಗ್ರೆಸ್‌ ಮುಖಂಡ ರಾಹುಲ್‌ ಗಾಂಧಿ (Rahul Gandhi) ಅವರನ್ನು ಸಿಎಂ ಸಿದ್ದರಾಮಯ್ಯ (CM Siddaramaiah) ಹಾಗೂ ಡಿಸಿಎಂ ಡಿಕೆ‌ ಶಿವಕುಮಾರ್ (DCM DK Shivakumar) ಬರಮಾಡಿಕೊಂಡರು.

VISTARANEWS.COM


on

rahul gandhi dk shivakumar cm siddaramaiah
Koo

ಬೆಂಗಳೂರು: ಮುಂಜಾನೆ ಒಂಬತ್ತು ಗಂಟೆಗೆ ಕೆಂಪೇಗೌಡ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ (Kempegowda International Airport) ಕಾಂಗ್ರೆಸ್‌ ಮುಖಂಡ ರಾಹುಲ್‌ ಗಾಂಧಿ (Rahul Gandhi) ಬಂದಿಳಿದಿದ್ದು, ಅವರನ್ನು ಸಿಎಂ ಸಿದ್ದರಾಮಯ್ಯ (CM Siddaramaiah) ಹಾಗೂ ಡಿಸಿಎಂ ಡಿಕೆ‌ ಶಿವಕುಮಾರ್ (DCM DK Shivakumar) ಬರಮಾಡಿಕೊಂಡರು. ಮಧ್ಯಾಹ್ನ 11 ಗಂಟೆಗೆ ಮಾನನಷ್ಟ ಮೊಕದ್ದಮೆ (Defamation Case) ವಿಚಾರಣೆ ಎದುರಿಸಲು ಅವರು ಜನಪ್ರತಿನಿಧಿಗಳ ಕೋರ್ಟ್‌ ಮುಂದೆ ಹಾಜರಾಗಲಿದ್ದಾರೆ.

ರಾಹುಲ್ ಗಾಂಧಿಯನ್ನು ಸ್ವಾಗತಿಸಲು ಏರ್‌ಪೋರ್ಟ್‌ಗೆ ಆಗಮಿಸಿದ ಡಿಕೆಶಿ ಹೇಳಿಕೆ ನೀಡಿ, “ಬಿಜೆಪಿಯವರು ರಾಹುಲ್ ಗಾಂಧಿ ವಿರುದ್ಧ ಸುಳ್ಳು ಕೇಸ್ ದಾಖಲು ಮಾಡಿದ್ದಾರೆ. 2500 ಕೋಟಿಗೆ ಸಿಎಂ ಸ್ಥಾನ ಮಾರಾಟವಾಗಿದೆ ಅಂತ ಅಂದು ಪೇಪರ್‌ಗಳಲ್ಲಿ ಬಂದಿತ್ತು. ಅದಕ್ಕೆ ನಾನು ಸಿದ್ದರಾಮಯ್ಯ 40 ಪರ್ಸೆಂಟ್ ಅಂತ ಜಾಹಿರಾತು ಕೊಟ್ಟಿದ್ದೆವು. ಇದರಲ್ಲಿ ರಾಹುಲ್ ಗಾಂಧಿ ಪಾತ್ರವಿಲ್ಲ. ಆ ಸಮಯದಲ್ಲಿ ರಾಹುಲ್ ಗಾಂಧಿ ಅಧ್ಯಕ್ಷರಾಗಿರಲಿಲ್ಲ” ಎಂದು ಹೇಳಿದರು.

ರಾಹುಲ್‌ ಮೇಲೆ ಕೋರ್ಟ್‌ ಗರಂ

ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯ ಈ ಮಾನನಷ್ಟ ಪ್ರಕರಣದ ವಿಚಾರಣೆ ನಡೆಸುತ್ತಿದೆ. ಕಳೆದ ಬಾರಿ ಇದರ ವಿಚಾರಣೆಯ ಸಂದರ್ಭದಲ್ಲಿ ಸಿಎಂ ಸಿದ್ದರಾಮಯ್ಯ (CM Siddaramaiah) ಹಾಗೂ ಡಿಸಿಎಂ ಡಿ.ಕೆ ಶಿವಕುಮಾರ್ (DCM DK Shivakumar) ನ್ಯಾಯಾಧೀಶರ ಮುಂದೆ ಹಾಜರಾಗಿದ್ದರು. ಇವರಿಬ್ಬರಿಗೂ ಷರತ್ತುಬದ್ಧ ಜಾಮೀನು ನೀಡಲಾಗಿತ್ತು. ಆದರೆ ರಾಹುಲ್‌ ಗಾಂಧಿ ಆಗಮಿಸಿರಲಿಲ್ಲ. ಇದರಿಂದ ಗರಂ ಆಗಿದ್ದ ನ್ಯಾಯಾಧೀಶರು, ಮುಂದಿನ ಬಾರಿ ರಾಹುಲ್‌ ಖುದ್ದು ಹಾಜರಿರುವಂತೆ ನಿರ್ದೇಶನ ನೀಡಿತ್ತು.

ಈ ಪ್ರಕರಣದ ದಾಖಲಿಸಿರುವ ಬಿಜೆಪಿ ಕಾರ್ಯದರ್ಶಿ, ಎಂಎಲ್‌ಸಿ ಕೇಶವಪ್ರಸಾದ್, “ಸಾಮಾನ್ಯರಂತೆ ರಾಹುಲ್‌ ಅವರಿಗೂ ಕಾನೂನು ಒಂದೇ” ಎಂದು ಹೇಳಿದ್ದಾರೆ. “ಚುನಾವಣೆ ಸಂದರ್ಭದಲ್ಲಿ ಕಾಂಗ್ರೆಸ್ ಅಧ್ಯಕ್ಷ ಡಿಕೆ ಶಿವಕುಮಾರ್, ಸಿಎಂ ಸಿದ್ದರಾಮಯ್ಯ ಸುಳ್ಳು ಜಾಹೀರಾತು ನೀಡಿದ್ದರು. ರಾಹುಲ್‌ ಗಾಂಧಿ ಅದನ್ನು ರಿಟ್ವೀಟ್ ಮಾಡಿಕೊಂಡರು. ಹಾಗಾಗಿ ಮೂವರ ವಿರುದ್ಧ ದೂರು ನೀಡಲಾಗಿತ್ತು. ಕೋರ್ಟ್ ಹಾಜರಾಗುವಂತೆ ಸಮನ್ಸ್ ಜಾರಿ ಮಾಡಿದೆ.‌ ಸಿಎಂ, ಡಿಸಿಎಂ ಹಾಜರಾಗಿದ್ದರು. ರಾಹುಲ್‌ ಏಳನೇ ತಾರೀಕು ಹಾಜರಾಗುವುದಾಗಿ ಹೇಳಿದ್ದಾರೆ. ಮೊದಲ ದಿನವೇ ಅವರು ಹಾಜರಾಗಬೇಕಿತ್ತು. ಬರದಿದ್ದಾಗ ಕೋರ್ಟ್‌ ಅವರಿಗೆ ಒಂದು ಅವಕಾಶ ಕೊಟ್ಟಿದೆ. ಬರದಿದ್ದರೆ, ಜಾಮೀನುರಹಿತ ವಾರೆಂಟ್ ಇಶ್ಯೂ ಮಾಡಬೇಕು ಅಂತ ನಾವು ವಾದ ಮಂಡಿಸಿದ್ದೆವು” ಎಂದಿದ್ದಾರೆ.

“ರಾಷ್ಟ್ರೀಯ ನಾಯಕರಾಗಿ ಅವರು ಕೋರ್ಟ್ ಸಮನ್ಸ್‌ಗೆ ಎಷ್ಟು ಗೌರವ ಕೊಡ್ತಾರೆ ಅಂತ ಮೊದಲ ದಿನವೇ ತೋರಿಸಬಹುದಿತ್ತು. ನೆಲದ ಕಾನೂನಿಗೆ ಗೌರವ ಕೊಟ್ಟು, ನಾಳೆ ಬರಲೇಬೇಕು. ಇಲ್ಲದಿದ್ದರೆ ನಾನ್ ಬೇಲಬಲ್ ವಾರೆಂಟ್ ಇಶ್ಯೂ ಆಗಲಿದೆ. ಬಿಜೆಪಿ ಸಾಮಾನ್ಯ ಕಾರ್ಯಕರ್ತನಿಗೂ ಎಲ್ಲಾ ಹೋರಾಟ ಮಾಡುವ ಕ್ಷಮತೆ ಇದೆ. ನಮ್ಮ ವಿರುದ್ಧ ಹಾಕಿರುವ ಜಾಹೀರಾತು ಸುಳ್ಳು. ಅವರು ಅದಕ್ಕೆ ದಾಖಲೆ ಕೊಡಬೇಕು. ಜನರ ದಾರಿ ತಪ್ಪಿಸಬಹುದು, ಆದರೆ ಕೋರ್ಟ್ ದಾರಿ ತಪ್ಪಿಸಲು ಸಾಧ್ಯವಿಲ್ಲ” ಎಂದು ಹೇಳಿದ್ದಾರೆ.

ಏನಿದು ಪ್ರಕರಣ?

08-05-2023ರಂದು 42ನೇ ವಿಶೇಷ ನ್ಯಾಯಾಲಯದಲ್ಲಿ ಬಿಜೆಪಿ ರಾಜ್ಯ ಕಾರ್ಯದರ್ಶಿ ಎಸ್.‌ ಕೇಶವ ಪ್ರಸಾದ್ ಖಾಸಗಿ ದೂರ ದಾಖಲು ಮಾಡಿದ್ದರು. ಪ್ರಕರಣದಲ್ಲಿ A1 ಕೆಪಿಸಿಸಿ, A2 ಡಿಕೆ ಶಿವಕುಮಾರ್, A3 ಆರೋಪಿಯಾಗಿ ಮುಖ್ಯಮಂತ್ರಿ ಸಿದ್ದರಾಮಯ್ಯ ಹಾಗೂ A4 ಆರೋಪಿಯಾಗಿ ರಾಹುಲ್ ಗಾಂಧಿ ಅವರನ್ನು ಹೆಸರಿಸಲಾಗಿದೆ.

“ಬಿಜೆಪಿ ಸರ್ಕಾರ 2019ರಿಂದ 2023ರವರೆಗೆ ಭ್ರಷ್ಟ ಆಡಳಿತ ನಡೆಸಿತ್ತು. ಆಗಿನ ಸಿಎಂ ಹುದ್ದೆ ರೂ. 2500 ಕೋಟಿಗೆ ಮಾರಾಟವಾಗಿತ್ತು. ಮಂತ್ರಿಗಳ ಹುದ್ದೆ ರೂ. 500 ಕೋಟಿ ಬಿಜೆಪಿ ಹೈಕಮಾಂಡ್‌ಗೆ ನೀಡಿ ಪಡೆದಿದ್ದಾರೆ. ಈ ಮೂಲಕ ಭ್ರಷ್ಟಾಚಾರ ಮಾಡಿದ್ದಾರೆ. ಇದಲ್ಲದೆ ಕೋವಿಡ್ ಕಿಟ್ ಪೂರೈಕೆ ಟೆಂಡರ್‌ನಲ್ಲಿ 75% ಡೀಲ್ ನಡೆದಿದೆ. ಪಿಡಬ್ಲ್ಯೂಡಿ ಗುತ್ತಿಗೆ ಟೆಂಡರ್‌ಗಳಲ್ಲಿ 40% ಡೀಲ್, ಮಠಕ್ಕೆ ನೀಡುವ ಅನುದಾನದಲ್ಲಿ 30% ಡೀಲ್, ಉಪಕರಣಗಳ ಪೂರೈಕೆಯಲ್ಲಿ 40% ಡೀಲ್, ಮಕ್ಕಳಿಗೆ ನೀಡುವ ಮೊಟ್ಟೆ ಪೂರೈಕೆಯ ಟೆಂಡರ್‌ನಲ್ಲಿ 30% ಡೀಲ್, ರಸ್ತೆ ಕಾಮಗಾರಿಗಳ ಟೆಂಡರ್‌ನಲ್ಲಿ 40% ಡೀಲ್ ನಡೆದಿದೆ” ಎಂದು ಆರೋಪಿಸಿದ್ದರು.

ಪರ್ಸೆಂಟೇಜ್ ಲೆಕ್ಕದಲ್ಲಿ ಕಮಿಷನ್ ಪಡೆದ ಆರೋಪ ಮಾಡಿ ಈ ಬಗ್ಗೆ ಅನೇಕ ಜಾಹೀರಾತುಗಳನ್ನೂ ಕಾಂಗ್ರೆಸ್‌ ನೀಡಿತ್ತು. ಇದರಿಂದ ಬಿಜೆಪಿ ಪಕ್ಷಕ್ಕೆ ಅಪಮಾನವಾಗಿದೆ ಎಂದು ಕಾಂಗ್ರೆಸ್ ಪಕ್ಷದ ಮುಖಂಡರ ವಿರುದ್ಧ ಬಿಜೆಪಿ ರಾಜ್ಯ ಪ್ರಧಾನ ಕಾರ್ಯದರ್ಶಿ ಎಸ್. ಕೇಶವ ಪ್ರಸಾದ್ ಐಪಿಸಿ 499, 500 ಅಡಿ ಖಾಸಗಿ ದೂರು ದಾಖಲು ಮಾಡಿದ್ದರು. ಈ ಬಗ್ಗೆ ವಾದ ಆಲಿಸಿ ಆರೋಪಿಗಳನ್ನು ಹಾಜರು ಪಡಿಸಲು ಕೋರ್ಟ್‌ ಸೂಚಿಸಿತ್ತು.

ಇದನ್ನೂ ಓದಿ: CM Siddaramaiah: ಸಿಎಂ, ಡಿಸಿಎಂ ಕೂಡ ಇಂದು ಕೋರ್ಟ್‌ ಕಟಕಟೆಯಲ್ಲಿ! ಏನಿದು ಕೇಸ್?‌

Continue Reading

ಪ್ರಮುಖ ಸುದ್ದಿ

Rahul Gandhi: ಬಿಜೆಪಿ ಮಾನನಷ್ಟ ಕೇಸ್‌ನಲ್ಲಿ ಸಿಎಂ, ಡಿಸಿಎಂಗೆ ಶರತ್ತುಬದ್ಧ ಜಾಮೀನು; ರಾಹುಲ್‌ ಗಾಂಧಿ ಮೇಲೆ ಕೋರ್ಟ್‌ ಗರಂ

Rahul Gandhi: ವಿಚಾರಣೆಗೆ ಮುನ್ನ ಆಗಮಿಸಿದ ಸಿಎಂ ಹಾಗೂ ಡಿಸಿಎಂ, ಕೋರ್ಟ್ ಹಾಲ್ ಮುಂದೆ ಸಾಮಾನ್ಯರಂತೆ, ಜೊತೆಯಾಗಿ ಕುಳಿತರು. ನಂತರ ನ್ಯಾಯಾಲಯಕ್ಕೆ ಆಗಮಿಸಿದ ನ್ಯಾಯಾಧೀಶ ಕೆ. ಎನ್. ಶಿವಕುಮಾರ್ ಮುಂದೆ ಇಬ್ಬರೂ ಹಾಜರಾದರು.

VISTARANEWS.COM


on

rahul gandhi
Koo

ಬೆಂಗಳೂರು: ಬಿಜೆಪಿಗೆ (BJP) ಮಾನನಷ್ಟ (Defamation Case) ಮಾಡಿರುವ ಪ್ರಕರಣದಲ್ಲಿ ಎಸಿಎಂಎಂ ಕೋರ್ಟ್‌ (ACMM court) ಮುಂದೆ ಇಂದು ಹಾಜರಾದ ಸಿಎಂ ಸಿದ್ದರಾಮಯ್ಯ (CM Siddaramaiah) ಹಾಗೂ ಡಿಸಿಎಂ ಡಿಕೆ ಶಿವಕುಮಾರ್‌ (DCM DK Shivakumar) ಶರತ್ತುಬದ್ಧ ಜಾಮೀನು (Bail) ಪಡೆದರು. ಪ್ರಕರಣದ ಇನ್ನೊಬ್ಬ ಆರೋಪಿ ರಾಹುಲ್‌ ಗಾಂಧಿ (Rahul Gandhi) ಗೈರು ಹಾಜರಾಗಿರುವ ಕುರಿತು ನ್ಯಾಯಾಧೀಶರು ಗರಂ ಆದರು.

ವಿಧಾನ ಪರಿಷತ್‌ ಸದಸ್ಯ, ಬಿಜೆಪಿ ರಾಜ್ಯ ಕಾರ್ಯದರ್ಶಿ ಎಸ್.‌ ಕೇಶವ ಪ್ರಸಾದ್ ಅವರು ಸಲ್ಲಿಸಿರುವ ಖಾಸಗಿ ದೂರು ಇಂದು ವಿಚಾರಣೆಗೆ ಬಂದಿದ್ದು, ನ್ಯಾಯಾಧೀಶರ ಮುಂದೆ ಸಿಎಂ, ಡಿಸಿಎಂ ಹಾಜರಾದರು. ವಿಧಾನಸಭೆ ಚುನಾವಣೆ ಸಂದರ್ಭದಲ್ಲಿ ಬಿಜೆಪಿ ವಿರುದ್ಧ ಮಾಡಿದ ಆರೋಪಗಳ ಹಿನ್ನೆಲೆಯಲ್ಲಿ ಕೈ ನಾಯಕರ ಮೇಲೆ ಮಾನನಷ್ಟ ಮೊಕದ್ದಮೆ ಹಾಕಲಾಗಿದೆ. ಪ್ರಕರಣದಲ್ಲಿ A1 ಕೆಪಿಸಿಸಿ, A2 ಡಿಕೆ ಶಿವಕುಮಾರ್, A3 ಮುಖ್ಯಮಂತ್ರಿ ಸಿದ್ದರಾಮಯ್ಯ ಹಾಗೂ ರಾಹುಲ್ ಗಾಂಧಿ A4 ಆರೋಪಿಯಾಗಿದ್ದಾರೆ.

ವಿಚಾರಣೆಗೆ ಮುನ್ನ ಆಗಮಿಸಿದ ಸಿಎಂ ಹಾಗೂ ಡಿಸಿಎಂ, ಕೋರ್ಟ್ ಹಾಲ್ ಮುಂದೆ ಸಾಮಾನ್ಯರಂತೆ, ಜೊತೆಯಾಗಿ ಕುಳಿತರು. ನಂತರ ನ್ಯಾಯಾಲಯಕ್ಕೆ ಆಗಮಿಸಿದ ನ್ಯಾಯಾಧೀಶ ಕೆ. ಎನ್. ಶಿವಕುಮಾರ್ ಮುಂದೆ ಇಬ್ಬರೂ ಹಾಜರಾದರು. ಪಾರ್ಟಿ ಪ್ರೆಸಿಡೆಂಟ್ ಹಾಗೂ ಎರಡನೇ ಆರೋಪಿ ಒಂದೇ ಎಂದು ವಕೀಲರು ತಿಳಿಸಿದರು. ಇಬ್ಬರನ್ನೂ ಹೊರ ಹೋಗಬಹುದೆಂದು ಜಡ್ಜ್‌ ಸೂಚಿಸಿದರು. ಇಬ್ಬರಿಗೂ ಶರತ್ತುಬದ್ಧ ಜಾಮೀನು ಮಂಜೂರು ಮಾಡಲಾಯಿತು. ಡಿಸಿಎಂ ಪರ ಎಎಜಿ ಎಸ್.ಎ ಅಹಮದ್ ವಾದಿಸಿದರು.

ನಾಲ್ಕನೇ ಆರೋಪಿ ರಾಹುಲ್ ಗಾಂದಿ ದೆಹಲಿಯಲ್ಲಿದ್ದಾರೆ. ಇಂದು ಇಂಡಿಯಾ ಕೂಟದ ಮೀಟಿಂಗ್ ಇದೆ. ಹೀಗಾಗಿ ರಾಹುಲ್ ಗಾಂಧಿ ಹಾಜರಾಗಲಾಗುತ್ತಿಲ್ಲ. ನಾಲ್ಕನೇ ತಾರೀಕು ಚುನಾವಣೆ ರಿಸಲ್ಟ್ ಇದೆ. ಹೀಗಾಗಿ ಕಾಲಾವಕಾಶ ನೀಡುವಂತೆ ವಿನಂತಿಸಿದರು. ಹಾಗಿದ್ದರೆ ಇಂದೇ ಬಂದು ಮುಗಿಸಿಕೊಂಡು ಹೋಗಬಹುದಿತ್ತಲ್ಲ, ದೆಹಲಿಗೆ ಹೋಗೋದಕ್ಕೆ ಐದು ದಿನ ಬೇಕಾಗಿಲ್ಲವಲ್ಲ ಎಂದು ಜಡ್ಜ್ ಪ್ರಶ್ನಿಸಿದರು. ನಂತರ ಮಧ್ಯಾಹ್ನ ಮೂರು ಗಂಟೆಗೆ ತಮ್ಮ ಆದೇಶವನ್ನು ಕಾಯ್ದಿರಿಸಿದರು.

ದೂರುದಾರರ ಪರ ಹಾಜರಾದ ವಕೀಲ ವಿನೋದ್ ಕುಮಾರ್, “ನ್ಯಾಯಾಲಯದಿಂದ ಸಮನ್ಸ್ ಜಾರಿ ಆದಾಗ ಬರಬೇಕು. ಪದೇ ಪದೆ ಕಾರಣ ನೀಡಿದ್ರೆ ಹೇಗೆ? ಎರಡು ಮೂರು ಸಲ ವಿನಾಯಿತಿ ನೀಡಲು ಅವಕಾಶ ಇಲ್ಲ ಎಂದು ಕಾನೂನಿನಲ್ಲಿ ಸ್ಪಷ್ಟವಾಗಿ ಹೇಳಿದೆ. ಮುಂದೆಯೂ ಬೇರೆ ಬೇರೆ ಸಭೆ ಇದೆ ಅಂತ ಹಾಜರಾಗದೇ ಇರಬಹುದು. ಇವತ್ತಿಗೆ ಎಲೆಕ್ಷನ್ ಮುಗಿಯುತ್ತೆ. ರಾಹುಲ್ ಗಾಂಧಿ ರಾಷ್ಟ್ರೀಯ ನಾಯಕರೇ ಆಗಿರಲಿ, ಕಾನೂನಿನ ಮುಂದೆ ಎಲ್ಲರೂ ಒಂದೇ. ಹೀಗಾಗಿ ರಾಹುಲ್ ಗಾಂಧಿಗೆ ವಾರೆಂಟ್ ಜಾರಿ ಮಾಡಿ” ಎಂದು ಮನವಿ ಮಾಡಿದರು.

ಶರತ್ತುಬದ್ಧ ಜಾಮೀನು ಮಂಜೂರು ಹಿನ್ನೆಲೆಯಲ್ಲಿ ಸಿಎಂ ಹಾಗೂ ಡಿಸಿಎಂ ಶ್ಯೂರಿಟಿ ಪತ್ರಗಳಿಗೆ ಸಹಿ ಹಾಕಿ ತೆರಳಿದರು. “ನನಗೂ ಮತ್ತು ಸಿಎಂಗೆ ಸಮನ್ಸ್ ನೀಡಲಾಗಿತ್ತು. ಹೀಗಾಗಿ ಬಂದಿದ್ದೇವೆ. ರಾಹುಲ್ ಗಾಂಧಿ ಅವರು ಸಹ ಬರಬೇಕಿತ್ತು. ಆದರೆ INDIA ಕೂಟದ ಸಭೆ ಇದೆ. ರಾಹುಲ್ ಗಾಂಧಿ ಸಹ ಬರುತ್ತಾರೆ. ಅವರಿಗೆ ನ್ಯಾಯಾಂಗದ ಮೇಲೆ ಗೌರವ ಇದೆ. ನಾವು ಯಾರನ್ನೂ ರಕ್ಷಣೆ ಮಾಡಲ್ಲ” ಎಂದು ಡಿಸಿಎಂ ಡಿಕೆ ಶಿವಕುಮಾರ್ ಹೇಳಿಕೆ ನೀಡಿದರು.

ರಾಹುಲ್‌ ಗಾಂಧಿ ಅವರಿಗೆ ಜಾಮೀನು ರಹಿತ ವಾರೆಂಟ್ ಜಾರಿ ಮಾಡದಂತೆ ಸುಪ್ರೀಂ ಕೋರ್ಟ್ ಆದೇಶ ಉಲ್ಲೇಖಿಸಿ ವಕೀಲ ಬಿ.ಎನ್ ಜಗದೀಶ್ ವಾದ ಮಂಡಿಸಿದರು.

ಏನಿದು ಪ್ರಕರಣ?

08-05-2023ರಂದು 42ನೇ ವಿಶೇಷ ನ್ಯಾಯಾಲಯದಲ್ಲಿ ಬಿಜೆಪಿ ರಾಜ್ಯ ಕಾರ್ಯದರ್ಶಿ ಎಸ್.‌ ಕೇಶವ ಪ್ರಸಾದ್ ಖಾಸಗಿ ದೂರ ದಾಖಲು ಮಾಡಿದ್ದರು. ಪ್ರಕರಣದಲ್ಲಿ A1 ಕೆಪಿಸಿಸಿ, A2 ಡಿಕೆ ಶಿವಕುಮಾರ್, A3 ಆರೋಪಿಯಾಗಿ ಮುಖ್ಯಮಂತ್ರಿ ಸಿದ್ದರಾಮಯ್ಯ ಹಾಗೂ A4 ಆರೋಪಿಯಾಗಿ ರಾಹುಲ್ ಗಾಂಧಿ ಅವರನ್ನು ಹೆಸರಿಸಲಾಗಿದೆ.

“ಬಿಜೆಪಿ ಸರ್ಕಾರ 2019ರಿಂದ 2023ರವರೆಗೆ ಭ್ರಷ್ಟ ಆಡಳಿತ ನಡೆಸಿತ್ತು. ಆಗಿನ ಸಿಎಂ ಹುದ್ದೆ ರೂ. 2500 ಕೋಟಿಗೆ ಮಾರಾಟವಾಗಿತ್ತು. ಮಂತ್ರಿಗಳ ಹುದ್ದೆ ರೂ. 500 ಕೋಟಿ ಬಿಜೆಪಿ ಹೈಕಮಾಂಡ್‌ಗೆ ನೀಡಿ ಪಡೆದಿದ್ದಾರೆ. ಈ ಮೂಲಕ ಭ್ರಷ್ಟಾಚಾರ ಮಾಡಿದ್ದಾರೆ. ಇದಲ್ಲದೆ ಕೋವಿಡ್ ಕಿಟ್ ಪೂರೈಕೆ ಟೆಂಡರ್‌ನಲ್ಲಿ 75% ಡೀಲ್ ನಡೆದಿದೆ. ಪಿಡಬ್ಲ್ಯೂಡಿ ಗುತ್ತಿಗೆ ಟೆಂಡರ್‌ಗಳಲ್ಲಿ 40% ಡೀಲ್, ಮಠಕ್ಕೆ ನೀಡುವ ಅನುದಾನದಲ್ಲಿ 30% ಡೀಲ್, ಉಪಕರಣಗಳ ಪೂರೈಕೆಯಲ್ಲಿ 40% ಡೀಲ್, ಮಕ್ಕಳಿಗೆ ನೀಡುವ ಮೊಟ್ಟೆ ಪೂರೈಕೆಯ ಟೆಂಡರ್‌ನಲ್ಲಿ 30% ಡೀಲ್, ರಸ್ತೆ ಕಾಮಗಾರಿಗಳ ಟೆಂಡರ್‌ನಲ್ಲಿ 40% ಡೀಲ್ ನಡೆದಿದೆ” ಎಂದು ಆರೋಪಿಸಿದ್ದರು.

ಪರ್ಸೆಂಟೇಜ್ ಲೆಕ್ಕದಲ್ಲಿ ಕಮಿಷನ್ ಪಡೆದ ಆರೋಪ ಮಾಡಿ ಈ ಬಗ್ಗೆ ಅನೇಕ ಜಾಹೀರಾತುಗಳನ್ನೂ ಕಾಂಗ್ರೆಸ್‌ ನೀಡಿತ್ತು. ಇದರಿಂದ ಬಿಜೆಪಿ ಪಕ್ಷಕ್ಕೆ ಅಪಮಾನವಾಗಿದೆ ಎಂದು ಕಾಂಗ್ರೆಸ್ ಪಕ್ಷದ ಮುಖಂಡರ ವಿರುದ್ಧ ಬಿಜೆಪಿ ರಾಜ್ಯ ಪ್ರಧಾನ ಕಾರ್ಯದರ್ಶಿ ಎಸ್. ಕೇಶವ ಪ್ರಸಾದ್ ಐಪಿಸಿ 499, 500 ಅಡಿ ಖಾಸಗಿ ದೂರು ದಾಖಲು ಮಾಡಿದ್ದರು. ಈ ಬಗ್ಗೆ ವಾದ ಆಲಿಸಿ ಆರೋಪಿಗಳನ್ನು ಹಾಜರು ಪಡಿಸಲು ಕೋರ್ಟ್‌ ಸೂಚಿಸಿತ್ತು.

ಇದನ್ನೂ ಓದಿ: CM Siddaramaiah: ಸಿಎಂ, ಡಿಸಿಎಂ ಕೂಡ ಇಂದು ಕೋರ್ಟ್‌ ಕಟಕಟೆಯಲ್ಲಿ! ಏನಿದು ಕೇಸ್?‌

Continue Reading

ಪ್ರಮುಖ ಸುದ್ದಿ

CM Siddaramaiah: ಸಿಎಂ, ಡಿಸಿಎಂ ಕೂಡ ಇಂದು ಕೋರ್ಟ್‌ ಕಟಕಟೆಯಲ್ಲಿ! ಏನಿದು ಕೇಸ್?‌

CM Siddaramaiah: ಪ್ರಕರಣದಲ್ಲಿ A1 ಕೆಪಿಸಿಸಿ, A2 ಡಿಕೆ ಶಿವಕುಮಾರ್, A3 ಆರೋಪಿಯಾಗಿ ಮುಖ್ಯಮಂತ್ರಿ ಸಿದ್ದರಾಮಯ್ಯ ಹಾಗೂ A4 ಆರೋಪಿಯಾಗಿ ರಾಹುಲ್ ಗಾಂಧಿ ಅವರನ್ನು ಹೆಸರಿಸಲಾಗಿದೆ. ಐಪಿಸಿ ಸೆಕ್ಷನ್ 499 ಹಾಗೂ 500 ಅಡಿಯಲ್ಲಿ ಖಾಸಗಿ ದೂರು ದಾಖಲಾಗಿದೆ.‌ ಡಿಕೆ ಶಿವಕುಮಾರ್ ಪರ ವಕೀಲರಾದ ದೀಪು 42ನೇ ಎಸಿಎಂಎಂ ಕೋರ್ಟ್‌ಗೆ ಹಾಜರಾಗಿದ್ದಾರೆ.

VISTARANEWS.COM


on

cm Siddaramaiah And DK Shivakumar
Koo

ಬೆಂಗಳೂರು: ಸಿಎಂ ಸಿದ್ದರಾಮಯ್ಯ (CM Siddaramaiah) ಹಾಗೂ ಡಿಸಿಎಂ ಡಿಕೆ ಶಿವಕುಮಾರ್‌ (DCM DK Shivakumar) ಇಬ್ಬರೂ ಇಂದು ಮಾನನಷ್ಟ ಮೊಕದ್ದಮೆಯೊಂದಕ್ಕೆ (Defamation case) ಸಂಬಂಧಿಸಿ ಎಸಿಎಂಎಂ ನ್ಯಾಯಾಲಯಕ್ಕೆ (ACMM court) ಹಾಜರಾಗಲಿದ್ದಾರೆ. ಬೆಳಗ್ಗೆ ಇಬ್ಬರೂ ಹಾಜರಾಗಿ ಜಾಮೀನು ಅರ್ಜಿ (bail plea) ಸಲ್ಲಿಸಲಿದ್ದಾರೆ.

ವಿಧಾನ ಪರಿಷತ್‌ ಸದಸ್ಯ, ಬಿಜೆಪಿ (BJP) ಮುಖಂಡ ಕೇಶವ ಪ್ರಸಾದ್ ಅವರು ಸಲ್ಲಿಸಿರುವ ಖಾಸಗಿ ದೂರು ವಿಚಾರಣೆಗೆ ಬಂದಿದ್ದು, ಇಂದು ನ್ಯಾಯಾಧೀಶರ ಮುಂದೆ ಸಿಎಂ, ಡಿಸಿಎಂ ಹಾಜರ್ ಆಗುತ್ತಿದ್ದಾರೆ. ವಿಧಾನಸಭೆ ಚುನಾವಣೆ (Assembly election) ಸಂದರ್ಭದಲ್ಲಿ ಬಿಜೆಪಿ ವಿರುದ್ಧ ಆರೋಪಿಸಿದ್ದ ಕೈ ನಾಯಕರ ಮೇಲೆ ಮಾನನಷ್ಟ ಮೊಕದ್ದಮೆ ಹಾಕಲಾಗಿದೆ.

“2500 ಕೋಟಿ ರೂಪಾಯಿ ಬಿಜೆಪಿ ಹೈಕಮಾಂಡ್‌ಗೆ ಕೊಟ್ಟರೆ ಸಿಎಂ ಹುದ್ದೆ ಸಿಗುತ್ತದೆ” ಎಂದಿದ್ದ ಆರೋಪ, ಕೋವಿಡ್ ಕಿಟ್ ಖರೀದಿ ಹಗರಣ, 40% ಕಮಿಷನ್ ಆರೋಪಗಳನ್ನು ಮಾಡಿದ್ದ ಕೈ ನಾಯಕರ ಮೇಲೆ ಕೇಶವ ಪ್ರಸಾದ್‌ ಮಾನನಷ್ಟ ಮೊಕದ್ದಮೆ ಹಾಕಿದ್ದರು. 08-05-2023ರಂದು 42ನೇ ವಿಶೇಷ ನ್ಯಾಯಾಲಯದಲ್ಲಿ ಖಾಸಗಿ ದೂರ ದಾಖಲು ಮಾಡಿದ್ದರು. ಈ ಪ್ರಕರಣದ ಕುರಿತು ಇಂದು ನಡೆಯುವ ವಿಚಾರಣೆಗೆ ಸಿಎಂ, ಡಿಸಿಎಂ ಹಾಜರ್ ಆಗಲಿದ್ದಾರೆ.

ಪ್ರಕರಣದಲ್ಲಿ A1 ಕೆಪಿಸಿಸಿ, A2 ಡಿಕೆ ಶಿವಕುಮಾರ್, A3 ಆರೋಪಿಯಾಗಿ ಮುಖ್ಯಮಂತ್ರಿ ಸಿದ್ದರಾಮಯ್ಯ ಹಾಗೂ A4 ಆರೋಪಿಯಾಗಿ ರಾಹುಲ್ ಗಾಂಧಿ ಅವರನ್ನು ಹೆಸರಿಸಲಾಗಿದೆ. ಐಪಿಸಿ ಸೆಕ್ಷನ್ 499 ಹಾಗೂ 500 ಅಡಿಯಲ್ಲಿ ಖಾಸಗಿ ದೂರು ದಾಖಲಾಗಿದೆ.‌ ಡಿಕೆ ಶಿವಕುಮಾರ್ ಪರ ವಕೀಲರಾದ ದೀಪು 42ನೇ ಎಸಿಎಂಎಂ ಕೋರ್ಟ್‌ಗೆ ಹಾಜರಾಗಿದ್ದಾರೆ.

ಏನು ಹೇಳಿದ್ದರು?

“ಬಿಜೆಪಿ ಸರ್ಕಾರ 2019ರಿಂದ 2023ರವರೆಗೆ ಭ್ರಷ್ಟ ಆಡಳಿತ ನಡೆಸಿತ್ತು. ಆಗಿನ ಸಿಎಂ ಹುದ್ದೆ ರೂ. 2500 ಕೋಟಿಗೆ ಮಾರಾಟವಾಗಿತ್ತು. ಮಂತ್ರಿಗಳ ಹುದ್ದೆ ರೂ. 500 ಕೋಟಿ ಬಿಜೆಪಿ ಹೈಕಮಾಂಡ್‌ಗೆ ನೀಡಿ ಪಡೆದಿದ್ದಾರೆ. ಈ ಮೂಲಕ ಭ್ರಷ್ಟಾಚಾರ ಮಾಡಿದ್ದಾರೆ. ಇದಲ್ಲದೆ ಕೋವಿಡ್ ಕಿಟ್ ಪೂರೈಕೆ ಟೆಂಡರ್‌ನಲ್ಲಿ 75% ಡೀಲ್ ನಡೆದಿದೆ. ಪಿಡಬ್ಲ್ಯೂಡಿ ಗುತ್ತಿಗೆ ಟೆಂಡರ್‌ಗಳಲ್ಲಿ 40% ಡೀಲ್, ಮಠಕ್ಕೆ ನೀಡುವ ಅನುದಾನದಲ್ಲಿ 30% ಡೀಲ್, ಉಪಕರಣಗಳ ಪೂರೈಕೆಯಲ್ಲಿ 40% ಡೀಲ್, ಮಕ್ಕಳಿಗೆ ನೀಡುವ ಮೊಟ್ಟೆ ಪೂರೈಕೆಯ ಟೆಂಡರ್‌ನಲ್ಲಿ 30% ಡೀಲ್, ರಸ್ತೆ ಕಾಮಗಾರಿಗಳ ಟೆಂಡರ್‌ನಲ್ಲಿ 40% ಡೀಲ್ ನಡೆದಿದೆ” ಎಂದು ಆರೋಪಿಸಿದ್ದರು.

ಪರ್ಸೆಂಟೇಜ್ ಲೆಕ್ಕದಲ್ಲಿ ಕಮಿಷನ್ ಪಡೆದ ಆರೋಪ ಮಾಡಿ ಈ ಬಗ್ಗೆ ಅನೇಕ ಜಾಹೀರಾತುಗಳನ್ನೂ ಕಾಂಗ್ರೆಸ್‌ ನೀಡಿತ್ತು. ಇದರಿಂದ ಬಿಜೆಪಿ ಪಕ್ಷಕ್ಕೆ ಅಪಮಾನವಾಗಿದೆ ಎಂದು ಕಾಂಗ್ರೆಸ್ ಪಕ್ಷದ ಮುಖಂಡರ ವಿರುದ್ಧ ಬಿಜೆಪಿ ರಾಜ್ಯ ಪ್ರಧಾನ ಕಾರ್ಯದರ್ಶಿ ಎಸ್. ಕೇಶವ ಪ್ರಸಾದ್ ಐಪಿಸಿ 499, 500 ಅಡಿ ಖಾಸಗಿ ದೂರು ದಾಖಲು ಮಾಡಿದ್ದರು. ಈ ಬಗ್ಗೆ ವಾದ ಆಲಿಸಿ ಆರೋಪಿಗಳನ್ನು ಹಾಜರು ಪಡಿಸಲು ಕೋರ್ಟ್‌ ಸೂಚಿಸಿತ್ತು.

ಇದನ್ನೂ ಓದಿ: DK Shivakumar: ಸಿಎಂ, ನನ್ನ ಮೇಲೆ ಶತ್ರು ಭೈರವಿ ಯಾಗ ನಡೆಯುತ್ತಿದೆ; ಡಿಕೆಶಿ ಹೊಸ ಬಾಂಬ್

Continue Reading

ಕರ್ನಾಟಕ

Bhavani Reavanna : ಭವಾನಿ ರೇವಣ್ಣಗೆ ಬಂಧನ ಭೀತಿ; ಜಾಮೀನು ಅರ್ಜಿ ತೀರ್ಪು ಮುಂದಕ್ಕೆ

Bhavani Reavanna : ಇದು ಅವರಿಗೆ ವಿಚಾರಣೆಗೆ ಹಾಜರಾಲು ನೀಡುತ್ತಿರುವ ಎರಡನೇ ನೋಟಿಸ್ ಆಗಿದೆ. ಪ್ರಜ್ವಲ್ ರೇವಣ್ಣ ಅವರಿಂದ ಅನ್ಯಾಯಕ್ಕೆ ಒಳಗಾಗಿದ್ದ ಸಂತ್ರಸ್ತ ಮಹಿಳೆಯೊಬ್ಬಳನ್ನು ಅಪಹರಿಸಿರುವ ಪ್ರಕರಣದಲ್ಲಿ ಭವಾನಿ ರೇವಣ್ಣ ಎಸ್​ಐಟಿ ಪೊಲೀಸರ ತನಿಖೆಗೆ ಒಳಪಡಬೇಕಾಗಿತ್ತು. ಆದರೆ, ಯಾವುದೇ ಕಾರಣಕ್ಕೆ ಯಾರಿಗೂ ಕಾಣಿಸದೇ, ಪೊಲೀಸರ ವಿಚಾರಣೆಗೂ ಹಾಜರಾಗದೇ ತಲೆ ಮರಿಸಿಕೊಂಡ ರೀತಿಯಲ್ಲಿ ವರ್ತಿಸುತ್ತಿದ್ದಾರೆ.

VISTARANEWS.COM


on

Bhavani Reavanna
Koo

ಬೆಂಗಳೂರು: ಲೈಂಗಿಕ ಹಗರಣದಲ್ಲಿನ ಸಂತ್ರಸ್ತೆಯನ್ನು ಅಪಹರಿಸಿದ ಪ್ರಕರಣದ ಆರೋಪಿಯಾಗಿರುವ ಭವಾನಿ ರೇವಣ್ಣ (Bhavani Reavanna) ಅವರಿಗೆ ಬಂಧನ ಭೀತಿ ಶುರುವಾಗಿದೆ. ತಮ್ಮನ್ನು ಬಂಧಿಸದಂತೆ ನಿರೀಕ್ಷಣಾ ಜಾಮೀನಿಗಾಗಿ ಭವಾನಿ ಅವರ ವಕೀಲರು ಸಲ್ಲಿಸಿದ್ದ ಅರ್ಜಿಯ ತೀರ್ಪನ್ನು ನ್ಯಾಯಾಲಯ ಮಧ್ಯಾಹ್ನ 2.30ಕ್ಕೆ ಮುಂದೂಡಿಕೆ ಮಾಡಿದೆ. ಹೀಗಾಗಿ ಅವರಿಗೆ ಬಂಧನ ಭೀತಿ ಶುರುವಾಗಿದೆ. ಏತನ್ಮಧ್ಯೆ ಲೈಂಗಿಕ ಹಗರಣದಲ್ಲಿನ ಸಂತ್ರಸ್ತೆಯನ್ನು ಅಪಹರಿಸಿದ ಪ್ರಕರಣದ ಆರೋಪಿಯಾಗಿರುವ ಭವಾನಿ ರೇವಣ್ಣ ಅವರಿಗೆ ಎಸ್​ಐಟಿ ಅಧಿಕಾರಿಗಳು ಮತ್ತೊಂದು ನೋಟಿಸ್​ ನೀಡಿದ್ದಾರೆ.

ಇದು ಅವರಿಗೆ ವಿಚಾರಣೆಗೆ ಹಾಜರಾಲು ನೀಡುತ್ತಿರುವ ಎರಡನೇ ನೋಟಿಸ್ ಆಗಿದೆ. ಪ್ರಜ್ವಲ್ ರೇವಣ್ಣ ಅವರಿಂದ ಅನ್ಯಾಯಕ್ಕೆ ಒಳಗಾಗಿದ್ದ ಸಂತ್ರಸ್ತ ಮಹಿಳೆಯೊಬ್ಬಳನ್ನು ಅಪಹರಿಸಿರುವ ಪ್ರಕರಣದಲ್ಲಿ ಭವಾನಿ ರೇವಣ್ಣ ಎಸ್​ಐಟಿ ಪೊಲೀಸರ ತನಿಖೆಗೆ ಒಳಪಡಬೇಕಾಗಿತ್ತು. ಆದರೆ, ಯಾವುದೇ ಕಾರಣಕ್ಕೆ ಯಾರಿಗೂ ಕಾಣಿಸದೇ, ಪೊಲೀಸರ ವಿಚಾರಣೆಗೂ ಹಾಜರಾಗದೇ ತಲೆ ಮರಿಸಿಕೊಂಡ ರೀತಿಯಲ್ಲಿ ವರ್ತಿಸುತ್ತಿದ್ದಾರೆ.

ಒಂದೆಡೆ ಮಗ ಪ್ರಜ್ವಲ್‌ ರೇವಣ್ಣ (prajwal revanna case) ನಿನ್ನೆ ರಾತ್ರಿ ಬಂಧನವಾಗಿದ್ದು, ಇಂದು ಮೆಡಿಕಲ್‌ ಟೆಸ್ಟ್‌ ನಡೆಸಲಾಗುತ್ತಿದೆ. ಇಂದೇ ನ್ಯಾಯಾಲಯದ ಮುಂದೆ ಹಾಜರುಪಡಿಸಿ ಪೊಲೀಸ್‌ ಕಸ್ಟಡಿಗೆ ಪಡೆಯಲು ಸಿದ್ಧತೆ ನಡೆಸಲಾಗಿದೆ. ಇಂದು ಭವಾನಿ ರೇವಣ್ಣ ಅವರು ಸಲ್ಲಿಸಿರುವ ನಿರೀಕ್ಷಣಾ ಜಾಮೀನು ಅರ್ಜಿ ಕೂಡ ತೀರ್ಪಿಗೆ ಬರುತ್ತಿದೆ. ಅದರ ಬೆನ್ನಲ್ಲೇ ಎಸ್‌ಐಟಿ ಮತ್ತೊಂದು ನೋಟೀಸ್ ನೀಡಿದೆ. ಕೆ.ಆರ್ ನಗರ ಠಾಣೆಯಲ್ಲಿ ದಾಖಲಾಗಿದ್ದ ಕಿಡ್ನಾಪ್ ಪ್ರಕರಣಕ್ಕೆ ಸಂಬಂಧಿಸಿದಂತೆ ಎಸ್ಐಟಿ ನೊಟೀಸ್ ನೀಡಿದೆ. “ಪ್ರಕರಣಕ್ಕೆ ಸಂಬಂಧಿಸಿ 01/06/2024ರಂದು ತನಿಖೆಗೆ ತನಿಖಾಧಿಕಾರಿಗಳು ಬರಲಿದ್ದು, ತಾವು ನೀಡಿದ ಈ ವಿಳಾಸದಲ್ಲಿ ತಮ್ಮನ್ನು ತನಿಖೆಗೆ ಒಳಪಡಿಸಲಾಗುವುದು. ಅಗತ್ಯ ಸಹಕಾರ ನೀಡಬೇಕು” ಎಂದು ನೊಟೀಸ್ ನೀಡಿದ್ದಾರೆ.

ಇದನ್ನೂ ಓದಿ ;Prajwal Revanna Case : ಪ್ರಜ್ವಲ್​ನನ್ನು ಮಹಿಳಾ ಪೊಲೀಸ್ ಸಿಬ್ಬಂದಿಯೇ ಬಂಧಿಸಿದ್ದು ಯಾಕೆ?

“ಈ ಹಿಂದೆ ನೀಡಿದ್ದ ನೋಟೀಸ್‌ಗೆ ನೀವು ಉತ್ತರಿಸಿಲ್ಲ. 15-05-24ರಂದು ನೀಡಿದ ನೋಟೀಸ್‌ಗೆ, ಹೊಳೆನರಸೀಪುರದ ಚನ್ನಾಂಭಿಕ ನಿವಾಸದಲ್ಲಿ ಸ್ಪಷ್ಟನೆ ನೀಡುವುದಾಗಿ ತಿಳಿಸಿದ್ದೀರಿ. ಈ ಪ್ರಕರಣದಲ್ಲಿ ನಿಮ್ಮನ್ನು ವಿಚಾರಣೆಗೆ ಒಳಪಡಿಸುವ ಅವಶ್ಯಕತೆ ಇದೆ. ಆದ್ದರಿಂದ ನೀವು ಹೇಳಿರುವಂತೆ ನಾವು ನಿಮ್ಮನ್ನು 01-06-24ರಂದು ವಿಚಾರಣೆಗೆ ಒಳಪಡಿಸಲಿದ್ದು, ಖುದ್ದು ಹಾಜರಿರಬೇಕು. ಮಹಿಳಾ ಅಧಿಕಾರಿಗಳೊಂದಿಗೆ ಜೂನ್ 1ರಂದು ಬೆಳಿಗ್ಗೆ 10ರಿಂದ ಸಂಜೆ 5 ಗಂಟೆ ಒಳಗೆ ವಿಚಾರಣೆಗೆ ಆಗಮಿಸುತ್ತೇವೆ. ಆ ಸಂದರ್ಭ ಖುದ್ದು ಮನೆಯಲ್ಲಿ ಹಾಜರಿರಬೇಕು” ಎಂದು ಎಸ್‌ಐಟಿ ಮುಖ್ಯಸ್ಥ ಹೇಮಂತ್‌ಕುಮಾರ್‌ ಆದೇಶಿಸಿದ್ದಾರೆ.

ಭವಾನಿ ರೇವಣ್ಣ ಅವರಿಗೆ ಇದುವರೆಗೆ ಎರಡು ನೋಟೀಸ್‌ಗಳನ್ನು ನೀಡಲಾಗಿದೆ. ನಂತರ ಎಸ್ಐಟಿಗೆ ಪತ್ರ ಬರೆದಿದ್ದ ಭವಾನಿ, ಅವಶ್ಯವಿದ್ದರೆ ತನಿಖೆಗೆ ತಮ್ಮ ಮನೆಯಲ್ಲಿ ಲಭ್ಯವಿರುವುದಾಗಿ ತಿಳಿಸಿದ್ದರು. ಈ ಹಿನ್ನೆಲೆಯಲ್ಲಿ ತಾವು ವಿಚಾರಣೆಗೆ ಬರುತ್ತಿರುವುದಾಗಿ ಎಸ್ಐಟಿಯಿಂದ ನೊಟೀಸ್‌ ಹೋಗಿದೆ. ಹಾಸನ ಹೊಳೆನರಸೀಪುರದ ಹೆಚ್.ಡಿ ರೇವಣ್ಣ ಹಾಗೂ ಭವಾನಿ ನಿವಾಸದ ಬಾಗಿಲಿಗೆ SIT ಟೀಂ ನೋಟೀಸ್ ಅಂಟಿಸಿದೆ. ಹೀಗಾಗಿ ನಾಳೆ ಹೊಳೆನರಸೀಪುರದಲ್ಲಿ ಭವಾನಿ ರೇವಣ್ಣ ಅವರ ಮೊದಲ ಸುತ್ತಿನ ವಿಚಾರಣೆ ನಡೆಯಲಿದೆ.

ಹಾಸನ ಸಂಸದ ಪ್ರಜ್ವಲ್‌ ರೇವಣ್ಣ ಲೈಂಗಿಕ ದೌರ್ಜನ್ಯ ಪ್ರಕರಣದಲ್ಲಿ (Prajwal Revanna Case) ಕೆ.ಆರ್.ನಗರ ಸಂತ್ರಸ್ತ ಮಹಿಳೆಯನ್ನು ಅಪಹರಣ ಮಾಡಿದ ಆರೋಪದ ಹಿನ್ನೆಲೆಯಲ್ಲಿ ಭವಾನಿ ರೇವಣ್ಣ (Bhavani Revanna) ಸಲ್ಲಿಸಿದ ನಿರೀಕ್ಷಣಾ ಜಾಮೀನು ಅರ್ಜಿಯ ಕುರಿತು ವಾದ-ಪ್ರತಿವಾದ ಆಲಿಸಿದ ನ್ಯಾಯಾಲಯವು ಮೇ 31ರಂದೇ ಆದೇಶವನ್ನು ಹೊರಡಿಸುವುದಾಗಿ ತಿಳಿಸಿದೆ. ಅತ್ತ, ತಮ್ಮ ವಿರುದ್ಧ ದಾಖಲಾದ ಎರಡೂ ಎಫ್‌ಐಆರ್‌ ರದ್ದುಗೊಳಿಸುವಂತೆ ಕೋರಿ ಎಚ್‌.ಡಿ.ರೇವಣ್ಣ ಕೂಡ ಅರ್ಜಿ ಸಲ್ಲಿಸಿದ್ದಾರೆ.

Continue Reading
Advertisement
NEET UG
ಪ್ರೇಮಿಗಳ ದಿನಾಚರಣೆ12 mins ago

NEET UG : ನೀಟ್-ಯುಜಿ ಫಲಿತಾಂಶ ಹಿಂಪಡೆಯಲು ಕೋರಿ ಸುಪ್ರೀಂ ಕೋರ್ಟ್​​ಗೆ ಅರ್ಜಿ

Personality Development
ಪ್ರಮುಖ ಸುದ್ದಿ14 mins ago

Personality Development: ಈ 10 ಸೂತ್ರ ಪಾಲಿಸಿದರೆ ನೆಮ್ಮದಿಯ ಬದುಕು ಗ್ಯಾರಂಟಿ!

reasi terror attack
ಪ್ರಮುಖ ಸುದ್ದಿ39 mins ago

Terror Attack: ಕಂದಮ್ಮನನ್ನೂ ಕೊಂದ ಉಗ್ರರು; ಎದೆಗೆ ಗುಂಡು ಬಿದ್ದರೂ ಪ್ರಯಾಣಿಕರನ್ನು ಉಳಿಸಲು ಯತ್ನಿಸಿದ್ದ ಚಾಲಕ

T20 World Cup
Latest54 mins ago

T20 World Cup : ಪಾಕಿಸ್ತಾನಕ್ಕೆ ಸಂಕಷ್ಟ ತಂದಿಟ್ಟ ಭಾರತ; ಸೂಪರ್ 8 ಹಂತ ಪ್ರವೇಶವೂ ಕಷ್ಟ!

Kangana Ranaut Looks Gorgeous In A White Saree
ಬಾಲಿವುಡ್55 mins ago

Kangana Ranaut: ಪ್ರಮಾಣ ವಚನ ಸಮಾರಂಭದಲ್ಲಿ ಬಿಳಿ ಸೀರೆಯಲ್ಲಿ ಮಿಂಚಿದ ಕಂಗನಾ!

IND vs PAK
ಪ್ರಮುಖ ಸುದ್ದಿ1 hour ago

IND vs PAK : ಪಾಕಿಸ್ತಾನದ ಬೌಲರ್​ ವಿರುದ್ಧ ವಿಶೇಷ ದಾಖಲೆ ಮಾಡಿದ ರೋಹಿತ್ ಶರ್ಮಾ

IND vs PAK
ಕ್ರೀಡೆ2 hours ago

IND vs PAK : ಭಾರತಕ್ಕೆ ಗೆಲುವಿನ ಚಾನ್ಸ್ ಕೇವಲ ಶೇ. 8, ಪಾಕ್ ಗೆ ಶೇ.92 ಇತ್ತು; ಆದರೆ…

Poonam Pandey making cake with ice cream with hot look
ಬಾಲಿವುಡ್2 hours ago

Poonam Pandey: ಪೂನಂ ಪಾಂಡೆಯ ರೆಸಿಪಿಗಿಂತ ಏಪ್ರನ್ ಮೇಲೆ ನೆಟ್ಟಿಗರ ಕಣ್ಣು; ರಸಿಕರ ಕಣ್ಣರಳಿಸಿದ ಹಾಟ್‌ ಬೆಡಗಿ!

Vastu Tips
ಧಾರ್ಮಿಕ2 hours ago

Vastu Tips: ನೆಮ್ಮದಿಯಿಂದ ನಿದ್ದೆ ಮಾಡಬೇಕೆ? ಈ ವಾಸ್ತು ನಿಯಮ ಪಾಲಿಸಿ

pm narendra Modi Cabinet
ಪ್ರಮುಖ ಸುದ್ದಿ2 hours ago

PM Narendra Modi: ಇಂದು ಸಂಜೆ ನರೇಂದ್ರ ಮೋದಿ ಸಂಪುಟ ಮೊದಲ ಸಭೆ; ಏನು ಅಜೆಂಡಾ?

Sharmitha Gowda in bikini
ಕಿರುತೆರೆ8 months ago

Geetha Serial Kannada: ನಿದ್ದೆ ಕದ್ದ ಚೋರಿ! ನಟಿ `ಭಾನುಮತಿ’ ಹಾಟ್‌ ಪೋಟೊಗಳಿಗೆ ಫ್ಯಾನ್ಸ್ ಫುಲ್ ಫಿದಾ

Kannada Serials
ಕಿರುತೆರೆ8 months ago

Kannada Serials TRP: 2ನೇ ಸ್ಥಾನದಲ್ಲಿ 2 ಧಾರಾವಾಹಿಗಳು; ಟಿಆರ್‌ಪಿ ರೇಸ್‌ನಲ್ಲಿಲ್ಲ ಭಾಗ್ಯಲಕ್ಷ್ಮೀ!

Bigg Boss- Saregamapa 20 average TRP
ಕಿರುತೆರೆ8 months ago

Kannada Serials TRP: ಏಳನೇ ಸ್ಥಾನಕ್ಕೆ ʻಅಮೃತಧಾರೆʼ ಕುಸಿತ; ಬಿಗ್‌ ಬಾಸ್‌-ಸರಿಗಮಪ ಟಿಆರ್‌ಪಿ ಎಷ್ಟು?

galipata neetu
ಕಿರುತೆರೆ6 months ago

Kanyadana Serial: ಕಿರುತೆರೆಗೆ ಮತ್ತೆ ಎಂಟ್ರಿ ಕೊಟ್ಟ ʻಗಾಳಿಪಟʼ ಖ್ಯಾತಿಯ ʻನೀತುʼ!

Kannada Serials
ಕಿರುತೆರೆ9 months ago

Kannada Serials TRP: ನಾಲ್ಕನೇ ಸ್ಥಾನಕ್ಕೆ ಕುಸಿತ ಕಂಡ ʻಸೀತಾ ರಾಮʼ; ಟಿಆರ್‌ಪಿ ರೇಸ್‌ಗೆ ʻಭಾಗ್ಯಲಕ್ಷ್ಮಿʼ ಬ್ಯಾಕ್‌!

Kannada Serials
ಕಿರುತೆರೆ8 months ago

Kannada Serials TRP: ಟಿಆರ್‌ಪಿಯಲ್ಲಿ ʻಭಾಗ್ಯಲಕ್ಷ್ಮೀʼ ಹವಾ; ʻಪುಟ್ಟಕ್ಕನ ಮಕ್ಕಳುʼ ಧಾರಾವಾಹಿಗೆ ಸಂಕಷ್ಟ!

Bigg Boss' dominates TRP; Sita Rama fell to the sixth position
ಕಿರುತೆರೆ8 months ago

Kannada Serials TRP: ಟಿಆರ್‌ಪಿಯಲ್ಲಿ ʻಬಿಗ್ ಬಾಸ್ʼದೇ ಮೇಲುಗೈ; 6ನೇ ಸ್ಥಾನಕ್ಕೆ ಕುಸಿದ ʻಸೀತಾ ರಾಮʼ

geetha serial Dhanush gowda engagement
ಕಿರುತೆರೆ6 months ago

Dhanush Gowda: ಗೀತಾ ಧಾರಾವಾಹಿ ನಟನ ನಿಶ್ಚಿತಾರ್ಥ; ಭವ್ಯಾಳ ಕಮೆಂಟ್‌ ಬಾಕ್ಸ್‌ ಆಫ್‌!

varun
ಕಿರುತೆರೆ7 months ago

Brindavana Serial: ʼಬೃಂದಾವನʼ ಧಾರಾವಾಹಿಯಲ್ಲಿ ದೊಡ್ಡ ಟ್ವಿಸ್ಟ್‌; ಪ್ರಮುಖ ಪಾತ್ರಧಾರಿಯೇ ಬದಲು

Kannada Serials
ಕಿರುತೆರೆ9 months ago

Kannada Serials TRP: ಟಿಆರ್‌ಪಿಯಲ್ಲಿ ಏರಿಕೆ ಕಂಡ ʻಅಮೃತಧಾರೆʼ; ʻಗಟ್ಟಿಮೇಳʼಕ್ಕೆ ನಾಲ್ಕನೇ ಸ್ಥಾನ!

Karnataka weather Forecast
ಮಳೆ3 days ago

Karnataka weather : ಮಳೆಯಲ್ಲೆ ತಪಸ್ಸಿಗೆ ಕುಳಿತ ವೃದ್ಧ; ಇನ್ನೊಂದು ವಾರ ನಾನ್‌ ಸ್ಟಾಪ್‌ ವರುಣನ ಅಬ್ಬರ

Sigandur launch
ಶಿವಮೊಗ್ಗ3 days ago

Sigandur launch: ಸಿಗಂದೂರು ಲಾಂಚ್‌ನಲ್ಲಿ ಭಾರಿ ವಾಹನಗಳಿಗೆ ನಿರ್ಬಂಧ

Karnataka Rain
ಮಳೆ4 days ago

Karnataka Rain : ಭಾರಿ ಮಳೆಗೆ ಮರ ಬಿದ್ದು ಮೇಕೆಗಳು ಸಾವು; ಸಿಡಿಲಿಗೆ ಎಲೆಕ್ಟ್ರಿಕ್‌ ಅಂಗಡಿ ಸುಟ್ಟು ಭಸ್ಮ

Lok Sabha Election Result 2024 Live
ದೇಶ6 days ago

Lok Sabha Election Result 2024 Live: ಲೋಕಸಭೆ ಚುನಾವಣೆ ಫಲಿತಾಂಶದ ಲೈವ್‌ ಇಲ್ಲಿ ವೀಕ್ಷಿಸಿ

Karnataka Rain
ಮಳೆ7 days ago

Karnataka Rain : 133 ವರ್ಷದ ರೆಕಾರ್ಡ್ ಬ್ರೇಕ್ ಮಾಡಿದ ʻಬೆಂಗಳೂರು ಮಳೆʼ

Snake Rescue Snakes spotted in heavy rain
ಮಳೆ7 days ago

Snake Rescue: ಮಳೆ ನೀರಿನಲ್ಲಿ ಹರಿದು ಬಂದು ಬೈಕ್‌ನಲ್ಲಿ ಸೇರಿಕೊಂಡ ಹಾವು; ಮನೆಗಳಲ್ಲೂ ಪ್ರತ್ಯಕ್ಷ

Karnataka Rain
ಮಳೆ1 week ago

Karnataka Rain : ವೀಕೆಂಡ್‌ ಮೋಜಿಗೆ ವರುಣ ಅಡ್ಡಿ; ಭಾನುವಾರ ಸಂಜೆಗೆ ಮಳೆ ಕಾಟ

Liquor ban
ಬೆಂಗಳೂರು1 week ago

Liquor Ban : ಮುಂದಿನ ಏಳು ದಿನಗಳಲ್ಲಿ ನಾಲ್ಕೂವರೆ ದಿನ ಬಾರ್ ಕ್ಲೋಸ್; ಎಣ್ಣೆ ಸಿಗೋದು ಯಾವ ದಿನ?

Assault Case in Shivamogga
ಕ್ರೈಂ2 weeks ago

Assault Case : ಶಿವಮೊಗ್ಗದಲ್ಲಿ ಮತ್ತೆ ಬಾಲ ಬಿಚ್ಚಿದ ಪುಂಡರು; ಗಾಂಜಾ ನಶೆಯಲ್ಲಿ ವಾಹನಗಳು ಪೀಸ್‌ ಪೀಸ್‌

Karnataka weather Forecast
ಮಳೆ2 weeks ago

Karnataka Weather : ಚಿಕ್ಕಮಗಳೂರಲ್ಲಿ ಭಾರಿ ಮಳೆ; ಯಾದಗಿರಿಯಲ್ಲಿ ಕರೆಂಟ್‌ ಕಟ್‌, ಜನರೇಟರ್‌ನಿಂದ ಮೊಬೈಲ್‌ಗಳಿಗೆ ಚಾರ್ಜಿಂಗ್‌!

ಟ್ರೆಂಡಿಂಗ್‌