Uttara Kannada News: ಮುಂಡಗೋಡದ ಪಾಳಾ ಅರಣ್ಯದಲ್ಲಿ ಕರಡಿ ದಾಳಿ, ವ್ಯಕ್ತಿಗೆ ಗಾಯ - Vistara News

ಉತ್ತರ ಕನ್ನಡ

Uttara Kannada News: ಮುಂಡಗೋಡದ ಪಾಳಾ ಅರಣ್ಯದಲ್ಲಿ ಕರಡಿ ದಾಳಿ, ವ್ಯಕ್ತಿಗೆ ಗಾಯ

Uttara Kannada News: ಕರಡಿಯೊಂದು ವ್ಯಕ್ತಿಯ ಮೇಲೆ ದಾಳಿ ಮಾಡಿ, ಗಾಯಗೊಳಿಸಿರುವ ಘಟನೆ ಮುಂಡಗೋಡ ತಾಲೂಕಿನ ಪಾಳಾ ಅರಣ್ಯದಲ್ಲಿ ಭಾನುವಾರ ಜರುಗಿದೆ.

VISTARANEWS.COM


on

Bear attack in Pala Forest Injury to person at Mundagoda
ಕರಡಿ ದಾಳಿಯಿಂದ ಗಾಯಗೊಂಡ ಕ್ಕಪ್ಪ ನಿಂಗಪ್ಪ ಮಾವುರ.
ಮಹತ್ವದ, ಕುತೂಹಲಕರ ಸುದ್ದಿಗಾಗಿ ಫಾಲೊ ಮಾಡಿ
Koo

ಮುಂಡಗೋಡ: ಕರಡಿಯೊಂದು ವ್ಯಕ್ತಿಯ ಮೇಲೆ ದಾಳಿ ಮಾಡಿ (Bear attack), ಗಾಯಗೊಳಿಸಿರುವ ಘಟನೆ ತಾಲೂಕಿನ ಪಾಳಾ ಅರಣ್ಯದಲ್ಲಿ (Pala Forest) ಭಾನುವಾರ ಜರುಗಿದೆ.

ಪಾಳಾ ಗ್ರಾಮದ ಚಿಕ್ಕಪ್ಪ ನಿಂಗಪ್ಪ ಮಾವುರ ಕರಡಿ ದಾಳಿಯಿಂದ ಗಾಯಗೊಂಡ ವ್ಯಕ್ತಿ. ಪಾಳಾ ಸರ್ವೆ 71 ರ ಅರಣ್ಯದಲ್ಲಿ ದನ ಮೇಯಿಸಲು ಹೋದಾಗ ಎರಡು ಮರಿ ಜತೆ ದೊಡ್ಡ ಕರಡಿ ಪ್ರತ್ಯಕ್ಷವಾಗಿ ಏಕಾಏಕಿ ಚಿಕ್ಕಪ್ಪನ ಮೇಲೆ ದಾಳಿ ಮಾಡಿದೆ.

ಇದರಿಂದ ಗಾಬರಿಗೊಂಡು ಚಿಕ್ಕಪ್ಪ ಕೂಗಾಡಿದಾಗ ಅಲ್ಲೇ ಪಕ್ಕದಲ್ಲಿ ದನ ಮೇಯಿಸುತ್ತಿದ್ದ ಸುರೇಶ ಎಂಬುವರು ಚಿಕ್ಕಪ್ಪನ ಧ್ವನಿ ಕೇಳಿ ಸ್ಥಳಕ್ಕೆ ಬಂದಾಗ ಕರಡಿ ದಾಳಿ ಮಾಡುತ್ತಿರುವುದು ನೋಡಿ ಕಟ್ಟಿಗೆಯ ಡೊಣ್ಣೆಯಿಂದ ಅವುಗಳನ್ನು ಓಡಿಸಿದ್ದಾನೆ. ಇದರಿಂದ ಚಿಕ್ಕಪ್ಪನಿಗೆ ಕೈ ಮತ್ತು ಎದೆಯ ಮೇಲೆ ಗಾಯವಾಗಿದೆ. ಅದೃಷ್ಟವಶಾತ್ ಪ್ರಾಣಾಪಾಯದಿಂದ ಪಾರಾಗಿದ್ದಾನೆ. ಗಾಯಾಳು ತಾಲೂಕು ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾನೆ.

ಇದನ್ನೂ ಓದಿ: Weather Report : ಬೆಂಗಳೂರಲ್ಲಿ ಅಲ್ಪ ಮಳೆ; ಅಲ್ಲಲ್ಲಿ ಬೀಸಲಿದೆ ಬಿರುಗಾಳಿ

ಪ್ರತಿದಿನದಂತೆ ನಮ್ಮ ಗದ್ದೆ ಹತ್ತಿರ ಸರ್ವೆ ನಂಬರ 71 ರಲ್ಲಿ ದನಗಳನ್ನು ಮೇಯಿಸಲು ಹೋಗಿದ್ದೆ ಆ ವೇಳೆ ತಾಯಿ ಮತ್ತು ಎರಡು ಮರಿ ಜತೆ ಕರಡಿ ಬಂದು ನನ್ನ ಮೇಲೆ ದಾಳಿ ಮಾಡಿ ಎದೆಯ ಮೇಲೆ ಕೈಯ ಮೇಲೆ ಉಗುರಿನಿಂದ ಪರಚಿ ಗಾಯಗೊಳಿಸಿತು ಎಂದು ಕರಡಿ ದಾಳಿಯಿಂದ ಗಾಯಗೊಂಡ ಚಿಕ್ಕಪ್ಪ ಮಾವುರ ತನ್ನ ಕಹಿ ಘಟನೆಯನ್ನು ವಿವರಿಸಿದ್ದಾನೆ.

ಕ್ಷಣ ಕ್ಷಣದ ಮಾಹಿತಿಗಾಗಿ Vistara News FaceBook ಪೇಜ್ ಫಾಲೋ ಮಾಡಿ
ಮಹತ್ವದ ಮಾಹಿತಿಗಾಗಿ ವಿಸ್ತಾರ ನ್ಯೂಸ್ ಆ್ಯಪ್ ಉಚಿತವಾಗಿ ಡೌನ್ ಲೋಡ್ ಮಾಡಿಕೊಳ್ಳಿ: Andriod App | IOS App

ಮಳೆ

Karnataka Weather: ದಕ್ಷಿಣ ಒಳನಾಡು, ಕರಾವಳಿ ಜಿಲ್ಲೆಗಳಲ್ಲಿ ಇಂದು ಸಂಜೆ ಭಾರಿ ಮಳೆ ಸಾಧ್ಯತೆ!

Karnataka Weather: ಜೂನ್‌ 5ರವರೆಗೆ ಉತ್ತರ ಕನ್ನಡ, ಉಡುಪಿ, ದಕ್ಷಿಣ ಕನ್ನಡ, ಬಾಗಲಕೋಟೆ, ಬೆಳಗಾವಿ ಸೇರಿ ರಾಜ್ಯದ ವಿವಿಧೆಡೆ ಗುಡುಗು ಸಹಿತ ಮಳೆಯಾಗುವ ಸಾಧ್ಯತೆ ಇದೆ ಎಂದು ಭಾರತೀಯ ಹವಾಮಾನ ಇಲಾಖೆ ಮಾಹಿತಿ ನೀಡಿದೆ.

VISTARANEWS.COM


on

Karnataka Weather
Koo

ಬೆಂಗಳೂರು: ರಾಜ್ಯದ ದಕ್ಷಿಣ ಒಳನಾಡು ಮತ್ತು ಕರಾವಳಿ ಜಿಲ್ಲೆಗಳಲ್ಲಿ ಬುಧವಾರ ಸಂಜೆ ಬಿರುಗಾಳಿ ಸಹಿತ ವ್ಯಾಪಕವಾಗಿ ಸಾಧಾರಣ ಮಳೆ (Rain News) ಹಾಗೂ ಅಲ್ಲಲ್ಲಿ ಭಾರಿ ಮಳೆ ಬೀಳುವ ಸಾಧ್ಯತೆ ಇದ್ದು, ಮಲೆನಾಡು ಜಿಲ್ಲೆಗಳಲ್ಲಿ ಅಲ್ಲಲ್ಲಿ ಚದುರಿದಂತೆ ಸಾಧಾರಣ ಮಳೆ (Karnataka Weather) ಮತ್ತು ಉತ್ತರ ಒಳನಾಡು ಜಿಲ್ಲೆಗಳಲ್ಲಿ ಒಣ ಹವೆಯಿರುವ ಸಾಧ್ಯತೆಯಿದೆ ಎಂದು ಭಾರತೀಯ ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.

ಇನ್ನು ಬೆಂಗಳೂರು ಸುತ್ತಮುತ್ತ ವ್ಯಾಪಕವಾಗಿ ಗುಡುಗು ಮಿಂಚು ಸಹಿತ ಸಾಧಾರಣ ಮಳೆ ಹಾಗೂ ಅಲ್ಲಲ್ಲಿ ಭಾರಿ ಮಳೆಯಾಗುವ ಸಾಧ್ಯತೆಯಿದೆ. ಮುಂದಿನ 72 ಗಂಟೆಗಳ ಕಾಲ ಗರಿಷ್ಠ ತಾಪಮಾನದಲ್ಲಿ ಯಾವುದೇ ದೊಡ್ಡ ಬದಲಾವಣೆಯಿಲ್ಲ, ನಂತರ ರಾಜ್ಯದಾದ್ಯಂತ 2-3 ° C ರಷ್ಟು ಕ್ರಮೇಣ ಕುಸಿಯುತ್ತದೆ.

ಮುಂದಿನ 48 ಗಂಟೆಗಳ ಕಾಲ ಸಾಮಾನ್ಯವಾಗಿ ಮೋಡ ಕವಿದ ಆಕಾಶ. ಹಗುರವಾದ ಮಳೆಗುಡುಗು ಸಹಿತ ಮಳೆಯಾಗುವ ಸಾಧ್ಯತೆಯಿದೆ. ಕೆಲವೊಮ್ಮೆ ಮೇಲೆ ಗಾಳಿಯು ಪ್ರಬಲವಾಗಿರುವ ಸಾಧ್ಯತೆಯಿದೆ. ಗರಿಷ್ಠ ಮತ್ತು ಕನಿಷ್ಠ ತಾಪಮಾನವು ಕ್ರಮವಾಗಿ 32 °C ಮತ್ತು 22 ° C ಆಗಿರಬಹುದು ಎಂದು ಹವಾಮಾನ ಇಲಾಖೆ ತಿಳಿಸಿದೆ.

ಮೇ 30ರಂದು ದಕ್ಷಿಣ ಕನ್ನಡ ಜಿಲ್ಲೆಯ ಕೆಲವು ಸ್ಥಳಗಳಲ್ಲಿ ಹಗುರದಿಂದ ಸಾಧಾರಣ ಮಳೆ/ಗುಡುಗು ಸಹಿತ ಮಳೆಯಾಗುವ ಸಾಧ್ಯತೆ ಇದೆ. ಹಾಸನ, ಕೊಡಗು, ಮೈಸೂರು ಜಿಲ್ಲೆಗಳ ಒಂದೆರಡು ಕಡೆಗಳಲ್ಲಿ ಹಗುರದಿಂದ ಸಾಧಾರಣ ಮಳೆಯಾಗುವ ಸಾಧ್ಯತೆಯಿದೆ. ಉಡುಪಿ, ಉತ್ತರ ಕನ್ನಡ ಜಿಲ್ಲೆಗಳಲ್ಲಿ ಕೆಲವು ಸ್ಥಳಗಳಲ್ಲಿ ಲಘು ಮಳೆ/ ಗುಡುಗು ಸಹಿತ ಮಳೆಯಾಗುವ ಸಾಧ್ಯತೆಯಿದೆ. ಮೇಲೆ ಮಾರುತಗಳು ಧಾರವಾಡ, ಗದಗ, ಹಾವೇರಿ, ಕೊಪ್ಪಳ ಜಿಲ್ಲೆಗಳಲ್ಲಿ (ಗಂಟೆಗೆ 40-50 ಕಿಮೀ) ವೇಗದಲ್ಲಿ ಬೀಸುವ ಸಾಧ್ಯತೆ ಮತ್ತು ಬೆಂಗಳೂರು, ಚಾಮರಾಜನಗರ, ಚಿಕ್ಕಮಗಳೂರು, ದಾವಣಗೆರೆ, ಮಂಡ್ಯ, ರಾಮನಗರದಲ್ಲಿ (30-40 ಕಿಮೀ) ವೇಗದಲ್ಲಿ ಬೀಸುವ ಸಾಧ್ಯತೆಯಿದೆ. ಶಿವಮೊಗ್ಗ ಜಿಲ್ಲೆಗಳು. ಉಳಿದ ಜಿಲ್ಲೆಗಳಲ್ಲಿ ಒಣ ಹವೆ ಇರುವ ಸಾಧ್ಯತೆಯಿದೆ ಎಂದು ತಿಳಿಸಿದೆ.

ಮೇ 31ರಂದು ಉಡುಪಿ ಮತ್ತು ದಕ್ಷಿಣ ಕನ್ನಡ ಜಿಲ್ಲೆಗಳಲ್ಲಿ ಕೆಲವೆಡೆ ಹಗುರದಿಂದ ಸಾಧಾರಣ ಮಳೆ/ಗುಡುಗು ಸಹಿತ ಮಳೆಯಾಗುವ ಸಾಧ್ಯತೆ ಇದೆ. ಚಾಮರಾಜನಗರ, ಚಿಕ್ಕಮಗಳೂರು, ಹಾಸನ, ಕೊಡಗು, ಮೈಸೂರು, ಶಿವಮೊಗ್ಗ ಜಿಲ್ಲೆಗಳ ಒಂದೆರಡು ಕಡೆಗಳಲ್ಲಿ ಬಿರುಗಾಳಿ (30-40 kmph) ಸಹಿತ ಹಗುರದಿಂದ ಸಾಧಾರಣ ಮಳೆಯಾಗುವ ಸಾಧ್ಯತೆಯಿದೆ. ಉತ್ತರ ಕನ್ನಡ ಜಿಲ್ಲೆಯ ಕೆಲವು ಸ್ಥಳಗಳಲ್ಲಿ ಲಘು ಮಳೆ/ಗುಡುಗು ಸಹಿತ ಮಳೆಯಾಗುವ ಸಂಭವವಿದೆ. ಧಾರವಾಡ, ಗದಗ, ಹಾವೇರಿ, ಕೊಪ್ಪಳ, ಬೆಂಗಳೂರು ಗ್ರಾಮಾಂತರ, ಬೆಂಗಳೂರು ನಗರ, ಚಿಕ್ಕಬಳ್ಳಾಪುರ, ದಾವಣಗೆರೆ, ಕೋಲಾರ, ಮಂಡ್ಯ, ರಾಮನಗರ, ತುಮಕೂರು ಜಿಲ್ಲೆಗಳಲ್ಲಿ (ಗಂಟೆಗೆ 30-40 ಕಿ.ಮೀ) ವೇಗದ ಗಾಳಿ ಬೀಸುವ ಸಾಧ್ಯತೆಯಿದೆ. ಉಳಿದ ಜಿಲ್ಲೆಗಳಲ್ಲಿ ಒಣ ಹವೆ ಇರುವ ಸಾಧ್ಯತೆಯಿದೆ.

ಇದನ್ನೂ ಓದಿ | Karnataka weather : ಗುಡುಗು ಸಹಿತ ಮಳೆಯೊಂದಿಗೆ 40 ಕಿ.ಮೀ ವೇಗದಲ್ಲಿ ಬೀಸುತ್ತೆ ಗಾಳಿ

ಇದೇ ರೀತಿ ಜೂನ್‌ 5ರವರೆಗೆ ಉತ್ತರ ಕನ್ನಡ, ಉಡುಪಿ, ದಕ್ಷಿಣ ಕನ್ನಡ, ಬಾಗಲಕೋಟೆ, ಬೆಳಗಾವಿ, ಬೀದರ್, ಧಾರವಾಡ, ಗದಗ, ಹಾವೇರಿ, ಕಲಬುರ್ಗಿ, ಕೊಪ್ಪಳ, ರಾಯಚೂರು, ವಿಜಯಪುರ, ಯಾದಗಿರಿ, ಬಳ್ಳಾರಿ, ಬೆಂಗಳೂರು ಗ್ರಾಮಾಂತರ, ಬೆಂಗಳೂರು ನಗರ ಸೇರಿದಂತೆ ಹಲವೆಡೆ ಹಗುರದಿಂದ ಸಾಧಾರಣ ಮಳೆಯಾಗುವ ಸಾಧ್ಯತೆ ಇದೆ ಚಾಮರಾಜನಗರ, ಚಿಕ್ಕಬಳ್ಳಾಪುರ, ಚಿಕ್ಕಮಗಳೂರು, ಚಿತ್ರದುರ್ಗ, ದಾವಣಗೆರೆ, ಹಾಸನ, ಕೊಡಗು, ಕೋಲಾರ, ಮಂಡ್ಯ, ಮೈಸೂರು, ರಾಮನಗರ, ಶಿವಮೊಗ್ಗ, ತುಮಕೂರು, ವಿಜಯನಗರ ಜಿಲ್ಲೆಗಳು.
ರಾಜ್ಯದ ಮಳೆ/ಗುಡುಗಿನ ಮುನ್ಸೂಚನೆ 0830 ಗಂಟೆಗಳ IST ವರೆಗೆ ಮಾನ್ಯವಾಗಿರುತ್ತದೆ.

Continue Reading

ಮಳೆ

Karnataka weather : ಗುಡುಗು ಸಹಿತ ಮಳೆಯೊಂದಿಗೆ 40 ಕಿ.ಮೀ ವೇಗದಲ್ಲಿ ಬೀಸುತ್ತೆ ಗಾಳಿ

Karnataka weather Forecast : ರಾಜ್ಯಾದ್ಯಂತ ಪ್ರತ್ಯೇಕ ಕಡೆಗಳಲ್ಲಿ ಭಾರಿ ಮಳೆಯೊಂದಿಗೆ (Rain News) ಗುಡುಗು, ಮಿಂಚು ಇರಲಿದ್ದು, 30-40 ಕಿ.ಮೀ ವೇಗದಲ್ಲಿ ಗಾಳಿ ಬೀಸುವ ಸಾಧ್ಯತೆಯಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆಯನ್ನು ನೀಡಿದೆ.

VISTARANEWS.COM


on

By

karnataka weather forecast
ಸಾಂದರ್ಭಿಕ ಚಿತ್ರ
Koo

ಬೆಂಗಳೂರು: ಮೇ 29 ರಂದು ದಕ್ಷಿಣ ಒಳನಾಡು ಹಾಗೂ ಉತ್ತರ ಒಳನಾಡಿನ ಜಿಲ್ಲೆಗಳಲ್ಲಿ ಚದುರಿದಂತೆ ಹಗುರದಿಂದ ಕೂಡಿದ ಮಳೆಯಾಗುವ (Karnataka weather Forecast) ಸಾಧ್ಯತೆಯಿದೆ. ಮಲೆನಾಡು ಭಾಗದಲ್ಲಿ ಮಧ್ಯಮ ಮಳೆಯಾದರೆ, ಕರಾವಳಿಯಲ್ಲಿ ಪ್ರತ್ಯೇಕವಾಗಿ ಭಾರಿ ಮಳೆಯಾಗುವ (Heavy Rain alert) ಸಾಧ್ಯತೆ ಇದೆ. ಕೆಲವೆಡೆ ವ್ಯಾಪಕವಾಗಿ ಹಗುರದಿಂದ ಮಧ್ಯಮ ಮಳೆಯಾಗುವ (Rain News) ಸಾಧ್ಯತೆಯಿದೆ.

ರಾಜ್ಯದ ಪ್ರತ್ಯೇಕ ಸ್ಥಳಗಳಲ್ಲಿ ಗುಡುಗು ಮಿಂಚು ಮತ್ತು 30-40 ಕಿ.ಮೀ ವೇಗದಲ್ಲಿ ಗಾಳಿ ಬೀಸುವ ಸಾಧ್ಯತೆಯಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆಯನ್ನು ನೀಡಿದೆ.

ದಕ್ಷಿಣ ಒಳನಾಡಿನ ಬೆಂಗಳೂರು ನಗರದಲ್ಲಿ ಚದುರಿದಂತೆ ಸಾಧಾರಣ ಮಳೆಯಾಗುವ ಸಾಧ್ಯತೆ ಇದೆ. ಉಳಿದಂತೆ ಕೋಲಾರ, ರಾಮನಗರ, ಮಂಡ್ಯ, ಮೈಸೂರು ಮತ್ತು ತುಮಕೂರಿನಲ್ಲಿ ಸಾಧಾರಣ ಮಳೆಯಾಗುವ ನಿರೀಕ್ಷೆ ಇದೆ. ಉಳಿದೆಡೆ ಒಣಹವೆ ಇರಲಿದೆ.

ಉತ್ತರ ಒಳನಾಡಿನ ರಾಯಚೂರು, ಗದಗ, ಕೊಪ್ಪಳ, ಬಳ್ಳಾರಿ ಮತ್ತು ವಿಜಯನಗರದಲ್ಲಿ ಹಗುರದಿಂದ ಸಾಧಾರಣ ಮಳೆಯಾಗಲಿದೆ. ಉಳಿದ ಭಾಗಗಳಲ್ಲಿ ಒಣ ಹವೆ ಮೇಲುಗೈ ಸಾಧಿಸಲಿದೆ.

ಮಲೆನಾಡಿನ ಹಾಸನ ಮತ್ತು ಕೊಡಗು, ಚಿಕ್ಕಮಗಳೂರು ಮತ್ತು ಶಿವಮೊಗ್ಗ ಜಿಲ್ಲೆಗಳಲ್ಲಿ ಹಗುರದಿಂದ ಸಾಧಾರಣ ಮಳೆಯಾಗುವ ಸಾಧ್ಯತೆ ಇದೆ. ಕರಾವಳಿಯ ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಭಾರೀ ಮಳೆಯಾಗುವ ಸಾಧ್ಯತೆ ಇದೆ. ಉಡುಪಿ, ಉತ್ತರ ಕನ್ನಡ ಚದುರಿದಂತೆ ಸಾಧಾರಣ ಮಳೆಯಾಗಲಿದೆ.

ಬೆಂಗಳೂರಲ್ಲಿ ಗುಡುಗು ಸಹಿತ ಮಳೆ

ರಾಜಧಾನಿ ಬೆಂಗಳೂರಿನಲ್ಲಿ ಗುಡುಗು ಸಹಿತ ಮಳೆಯಾಗುವ ಸಾಧ್ಯತೆ ಇದೆ. ಗರಿಷ್ಠ ಮತ್ತು ಕನಿಷ್ಠ ತಾಪಮಾನವು ಕ್ರಮವಾಗಿ 31 ಡಿಗ್ರಿ ಸೆಲ್ಸಿಯಸ್ ಮತ್ತು 21 ಡಿಗ್ರಿ ಸೆಲ್ಸಿಯಸ್ ಇರಲಿದೆ.

ಇದನ್ನೂ ಓದಿ: Love Case : ಪ್ರೀತಿಸಿದವಳೇ ಬೇಕೆಂದ ಪ್ರೇಮಿಗೆ ಪೆಟ್ರೋಲ್‌ ಸುರಿದು ಬೆಂಕಿ ಹಚ್ಚಿದ್ರಾ ಯುವತಿ ಕುಟುಂಬಸ್ಥರು!

ಸೀಸನ್‌ ಎಂಡ್‌ ಫ್ಯಾಷನ್‌ಗೆ ಕಾಲಿಟ್ಟ ಸಮುದ್ರದ ಅಲೆ ಬಿಂಬಿಸುವ ವೆವಿ ಡ್ರೆಸ್‌!

ಇನ್ನೇನೂ ಸಮ್ಮರ್‌ ಸೀಸನ್‌ (Summer dress fashion) ಮುಗಿಯುವ ಹಂತದಲ್ಲಿದೆ. ಆಗಲೇ ವೆವಿ ಡ್ರೆಸ್‌ಗಳು ಎಂಟ್ರಿ ನೀಡಿವೆ. ಹೌದು. ನೋಡಿದಾಕ್ಷಣ ಮನೋಲ್ಲಾಸ ತುಂಬುವಂತಹ ಉತ್ಸಾಹ ಮೂಡಿಸುವ ಡಿಫರೆಂಟ್‌ ಲುಕ್‌ ನೀಡುವ ನಾನಾ ಶೇಡ್‌ನ ವೆವಿ ಡ್ರೆಸ್‌ಗಳು ಫ್ಯಾಷನ್‌ ಲೋಕಕ್ಕೆ ಕಾಲಿಟ್ಟಿವೆ.

Summer Dress Fashion

ಏನಿದು ವೆವಿ ಡ್ರೆಸ್‌?

ಅರರೆ, ಏನಿದು ವೆವಿ ಡ್ರೆಸ್‌ ಎಂದು ಯೋಚಿಸುತ್ತಿದ್ದೀರಾ! ಹೆಸರೇ ಹೇಳುವಂತೆ, ಇವು ಬೀಚ್‌ನಲ್ಲಿ ಸಮುದ್ರದ ಅಲೆಗಳನ್ನು ಬಿಂಬಿಸುವಂತಹ ಪ್ರಿಂಟ್ಸ್ ಇರುವಂತಹ ಸಮ್ಮರ್‌ ಡ್ರೆಸ್‌ಗಳಿವು. ನೋಡಲು ಬೀಚ್‌ ಲುಕ್‌ ಪ್ಲಸ್‌ ಹಾಲಿ ಡೇ ಪಾರ್ಟಿ ಲುಕ್‌ ನೀಡುವಂತಹ ಉಡುಗೆಗಳಿವು. ಅಷ್ಟೇಕೆ! ಲಂಚ್‌-ಬ್ರಂಚ್‌ ಪಾರ್ಟಿಗಳಲ್ಲೂ ಕಾಣಬಹುದಾದ ಹೈ ಫ್ಯಾಷನ್‌ ಉಡುಪುಗಳಿವು. ಇವುಗಳ ಪ್ರಿಂಟ್ಸ್ ಅಲೆಗಳಂತೆ ಇರುವುದರಿಂದ ಇವನ್ನು ವೆವಿ ಡ್ರೆಸ್‌ಗಳೆಂದು ಕರೆಯಲಾಗುತ್ತದೆ. ನಾನಾ ಹೈ ಫ್ಯಾಷನ್‌ ಬ್ರಾಂಡ್‌ಗಳಲ್ಲಿ ಇವು ಬಿಡುಗಡೆಗೊಂಡಿವೆ. ಸೆಲೆಬ್ರೆಟಿಗಳು ಮಾತ್ರವಲ್ಲ, ಸ್ಟೈಲಿಶ್‌ ಹುಡುಗಿಯರನ್ನು ಸವಾರಿ ಮಾಡತೊಡಗಿವೆ ಎಂದು ವಿವರಿಸುತ್ತಾರೆ ಸ್ಟೈಲಿಸ್ಟ್‌ಗಳು.

Summer Dress Fashion

ಶಾರ್ವರಿ ವೆವಿ ಡ್ರೆಸ್‌

ಬಾಲಿವುಡ್‌ನಲ್ಲಿ ಇನ್ನೂ ಅತಿ ಹೆಚ್ಚಾಗಿ ಕಂಡು ಬರದ ಉಡುಪುಗಳಲ್ಲಿ ಈ ವೆವಿ ಡ್ರೆಸ್‌ ಕೂಡ ಸೇರಿದೆ. ಯಾಕೆಂದರೇ, ಈ ಉಡುಪು ಈ ಜನರೇಷನ್‌ ನಟಿಯರ ಲಿಸ್ಟ್ನಲ್ಲಿದೆ. ಇದಕ್ಕೆ ಪೂರಕ ಎಂಬಂತೆ, ಬಾಲಿವುಡ್‌ ನಟಿ ಶಾರ್ವರಿ ಸಮುದ್ರದ ಅಲೆಗಳನ್ನು ನೆನಪಿಸುವ ಪಿಸ್ತಾ ಮಿಂಟ್‌ ಗ್ರೀನ್‌ ಶೇಡ್ ಮಿಕ್ಸ್ ಇರುವಂತಹ ವೆವಿ ಡ್ರೆಸ್‌ನಲ್ಲಿ ಕಾಣಿಸಿಕೊಂಡು ಫ್ಯಾಷನ್‌ ಲೋಕದಲ್ಲಿ ಟ್ರೆಂಡ್‌ ಸೆಟ್‌ ಮಾಡಿದ್ದಾರೆ. ಸದ್ಯ, ಇತರೇ ಯಾವುದೇ ನಟಿಯರು ಪ್ರಯೋಗಿಸದ ಡಿಸೈನರ್‌ವೇರ್‌ನಲ್ಲಿ ಕಾಣಿಸಿಕೊಂಡಿರುವ ಹೆಗ್ಗಳಿಕೆ ಇವರದು. ವೆವಿ ಡ್ರೆಸ್‌ನಂತಹ ಸಮ್ಮರ್‌ ಡ್ರೆಸ್‌ ಇದೆಯಾ! ಒಮ್ಮೆ ನಾವು ಕೂಡ ಧರಿಸೋಣಾ! ಎಂಬ ಟೀನೇಜ್‌ ಹುಡುಗಿಯರ ಫ್ಯಾಷನ್‌ ಚಾಯ್ಸ್‌ಗೆ ಹೊಸ ಶೇಡ್‌ಗಳು ಆಕರ್ಷಿಸುತ್ತಿವೆ ಎನ್ನುತ್ತಾರೆ ಫ್ಯಾಷನ್‌ ವಿಮರ್ಶಕಿ ಜಿಯಾ. ಅವರ ಪ್ರಕಾರ, ವೆವಿ ಡ್ರೆಸ್‌ಗಳು ಯಂಗ್‌ ಲುಕ್‌ ನೀಡುತ್ತವಂತೆ. ಹಾಗಾಗಿ ಆನ್‌ಲೈನ್‌ನಲ್ಲಿ ಇದೀಗ ಇವುಗಳ ಖರೀದಿ ಹೆಚ್ಚಾಗಿದೆ ಎನ್ನುತ್ತಾರೆ.

Summer Dress Fashion

ವೆವಿ ಡ್ರೆಸ್‌ಗಳ ಟ್ರೆಂಡ್‌

ಸಾಗರ ಹಾಗೂ ಸಮುದ್ರ ಅಲೆಗಳ ನ್ಯಾಚುರಲ್‌ ಶೇಡ್ಸ್, ಪೀಚ್‌ ಹಾಗೂ ಕೇಸರಿ ಶೇಡ್‌ಗಳ ನೈಜವೆನಿಸದ ಪ್ರಿಂಟ್ಸ್‌ನ ವೆವಿ ಡ್ರೆಸ್‌ಗಳು, ಅಸ್ಸೆಮ್ಮಿಟ್ರಿಕಲ್‌ ವೆವಿ ಡ್ರೆಸ್‌ಗಳು ಅದರಲ್ಲೂ, ವೈಟ್‌ & ಸೀ ಬ್ಲ್ಯೂ , ರಾಯಲ್‌ ಬ್ಲ್ಯೂ ವೆವಿ ಡ್ರೆಸ್‌ಗಳು ಅತಿ ಹೆಚ್ಚಾಗಿ ಬೇಡಿಕೆ ಪಡೆದುಕೊಂಡಿವೆ.

  • ಸಮ್ಮರ್‌ ಪಾರ್ಟಿಗೆ ಹಾಗೂ ಔಟಿಂಗ್‌ಗೆ ಮ್ಯಾಚ್‌ ಆಗುತ್ತವೆ.
  • ಹೆಚ್ಚು ಆಕ್ಸೆಸರೀಸ್‌ ಧರಿಸುವ ಅಗತ್ಯವಿಲ್ಲ.
  • ಮಿನಿಮಲ್‌ ಮೇಕಪ್‌ ಆಕರ್ಷಕವಾಗಿ ಕಾಣಿಸುತ್ತದೆ.

ಈ ಸಂಗತಿಯ ಕುರಿತು ನಿಮ್ಮ ಅನಿಸಿಕೆ ಏನು? ಕಾಮೆಂಟ್ ಮೂಲಕ ತಿಳಿಸಿ

Continue Reading

ಕರ್ನಾಟಕ

Robbery Case: ಅರಬೈಲ್ ಘಟ್ಟದಲ್ಲಿ ಕಾರು ಅಡ್ಡಗಟ್ಟಿ ದರೋಡೆ; ಇಬ್ಬರು ಆರೋಪಿಗಳ ಬಂಧನ

Robbery Case: ಯಲ್ಲಾಪುರ ತಾಲೂಕಿನ ಅರಬೈಲ್‌ ಘಟ್ಟದಲ್ಲಿ ಕಾರನ್ನು ಅಡಗಟ್ಟಿ, ಕಾರಿನಲ್ಲಿದ್ದವರ ಮೇಲೆ ಹಲ್ಲೆ ನಡೆಸಿ, ಕಾರು ಹಾಗೂ ಮೊಬೈಲ್‌ ಫೋನ್‌ಗಳನ್ನು ದರೋಡೆ ಮಾಡಿದ್ದ ಆರೋಪಿಗಳನ್ನು ಯಲ್ಲಾಪುರ ಠಾಣಾ ಪೊಲೀಸರು ಬಂಧಿಸುವಲ್ಲಿ ಯಶಸ್ವಿಯಾಗಿದ್ದಾರೆ.

VISTARANEWS.COM


on

Robbery Case Two accused arrested by yallapur police
Koo

ಯಲ್ಲಾಪುರ: ತಾಲೂಕಿನ ಅರಬೈಲ್‌ ಘಟ್ಟದಲ್ಲಿ ಕಾರನ್ನು ಅಡಗಟ್ಟಿ, ಕಾರಿನಲ್ಲಿದ್ದವರ ಮೇಲೆ ಹಲ್ಲೆ ನಡೆಸಿ, ಕಾರು ಹಾಗೂ ಮೊಬೈಲ್‌ ಫೋನ್‌ಗಳನ್ನು ದರೋಡೆ (Robbery Case) ಮಾಡಿದ್ದ ಆರೋಪಿಗಳನ್ನು ಯಲ್ಲಾಪುರ ಠಾಣಾ ಪೊಲೀಸರು ಬಂಧಿಸುವಲ್ಲಿ ಯಶಸ್ವಿಯಾಗಿದ್ದಾರೆ.

ಇದನ್ನೂ ಓದಿ: Karnataka Weather : ಚಿಕ್ಕಮಗಳೂರಲ್ಲಿ ಭಾರಿ ಮಳೆ; ಯಾದಗಿರಿಯಲ್ಲಿ ಕರೆಂಟ್‌ ಕಟ್‌, ಜನರೇಟರ್‌ನಿಂದ ಮೊಬೈಲ್‌ಗಳಿಗೆ ಚಾರ್ಜಿಂಗ್‌!

ಮೇ 23ರಂದು ರಾಜಸ್ಥಾನದ ಪಾಲಿ ಜಿಲ್ಲೆಯ ಸುರೇಶ ರಾವ್ ಹಿಮ್ಮತ್‌ ರಾಮಜೀರಾವ್ ಎಂಬುವವರು ತಮ್ಮ ಸ್ನೇಹಿತ ಸ್ನೇಹಿತ ಸಂಪತ್ ಸೊಲಂಕಿರವರೊಂದಿಗೆ ಮುಂಬೈದಿಂದ ಮಂಗಳೂರಿಗೆ ತೆರಳುತ್ತಿರುವಾಗ ಅಂಕೋಲಾ ಮಾರ್ಗದ ಅರಬೈಲ್ ಘಟ್ಟದಲ್ಲಿ ಬೇರೊಂದು ಕಾರಿನಲ್ಲಿ ಬಂದ 4 ಜನ ಅಪರಿಚಿತರು ಕಾರನ್ನು ಅಡ್ಡಗಟ್ಟಿ, ಕಾರಿನ ಎರಡು ಗ್ಲಾಸ್ ಒಡೆದು, 3 ಮೊಬೈಲ್‌ ಫೋನ್‌, ಕಾರಿನ ಕೀ ಕಸಿದುಕೊಂಡು, ನೀವು ಶಿಂಧೆ ಸಾಹೇಬರ ಕಾರಿಗೆ ಓವರಟೇಕ್ ಮಾಡಿಕೊಂಡು ಬಂದಿದ್ದೀರಿ ಎಂದು ಹೇಳಿ ಅವರಿಬ್ಬರನ್ನು ಕಾರಿನಲ್ಲಿ ಕುಳ್ಳಿರಿಸಿಕೊಂಡು ಹೋಗಿ, ಮರಳಿ ಹುಬ್ಬಳ್ಳಿ ರಸ್ತೆಗೆ ಕರೆತಂದು ರಸ್ತೆ ಬದಿಯಲ್ಲಿ ಇಳಿಸಿ, ಶಿಂಧೆ ಸಾಹೇಬರು ಹಿಂದೆ ಇದ್ದಾರೆ ನೀವು ಬಸ್ಸಿನಲ್ಲಿ ಹೋಗಿ ಎಂದು ಹೇಳಿ ಸುಲಿಗೆ ಮಾಡಿಕೊಂಡು ಹೋಗಿರುವ ಕುರಿತು ಯಲ್ಲಾಪುರ ಪೊಲೀಸ್‌ ಠಾಣೆಯಲ್ಲಿ ಪ್ರಕರಣ ದಾಖಲಾಗಿತ್ತು.

ಪ್ರಕರಣದ ಬೆನ್ನತ್ತಿದ ಪೊಲೀಸರು, ದೊರೆತ ಖಚಿತ ಮಾಹಿತಿಯ ಮೇರೆಗೆ ಮಹಾರಾಷ್ಟ್ರ ರಾಜ್ಯದ ಸಾಂಗ್ಲಿ ಜಿಲ್ಲೆಯ ಸುರಜ ಸುಧಾಕರ ಚೌಹಾಣ (30) ಹಾಗೂ ರವೀಂದ್ರ ಭಜರಂಗ ಮದನಿ (31) ಎಂಬುವ ಆರೋಪಿಗಳನ್ನು ಬೆಳಗಾವಿ ಜಿಲ್ಲೆಯ ಅಥಣಿ ಪಟ್ಟಣದಲ್ಲಿ ಬಂಧಿಸಿದ್ದಾರೆ.

ಇದನ್ನೂ ಓದಿ: Credit Card Safety Tips: ಕ್ರೆಡಿಟ್‌ ಕಾರ್ಡ್ ವಂಚನೆಯಿಂದ ಪಾರಾಗಲು ಇಲ್ಲಿದೆ 9 ಸಲಹೆ

ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ವಿಷ್ಣುವರ್ಧನ್, ಹೆಚ್ಚುವರಿ ಪೊಲೀಸ್‌ ಅಧೀಕ್ಷಕ ಜಯಕುಮಾರ, ಡಿವೈಎಸ್ಪಿ ಎಂ.ಎಸ್ ಪಾಟೀಲ್ ಅವರ ಮಾರ್ಗದರ್ಶನದಲ್ಲಿ ಸಿಪಿಐ ರಮೇಶ ಎಚ್. ಹನಾಪುರ ನೇತೃತ್ವದಲ್ಲಿ ಪಿಎಸ್‌ಐಗಳಾದ ಸಿದ್ದಪ್ಪ ಗುಡಿ, ವಿಜಯರಾಜ, ಎಎಸ್‌ಐ ಆನಂದ ಡಿ ಪಾವಸ್ಕರ ಹಾಗೂ ಸಿಬ್ಬಂದಿಗಳಾದ ಬಸವರಾಜ ಹಗರಿ, ರಾಮಾ ಪಾವಸ್ಕರ, ರಾಘವೇಂದ್ರ ಮೂಳೆ, ಸಂತೋಷ ಬಾಳೇರ, ಶೋಭಾ ನಾಯ್ಕ ಅವರು ಆರೋಪಿಗಳನ್ನು ಬಂಧಿಸುವಲ್ಲಿ ಪ್ರಮುಖ ಪಾತ್ರ ವಹಿಸಿದ್ದಾರೆ.

Continue Reading

ಉತ್ತರ ಕನ್ನಡ

Uttara Kannada News: ಬೆಳೆ ವಿಮೆ ಪರಿಹಾರವನ್ನು ಇತರೆ ಸಾಲದ ಬಾಕಿಗೆ ಹೊಂದಾಣಿಕೆ ಮಾಡಬೇಡಿ: ಜಿಪಂ ಸಿಇಒ

Uttara Kannada News: ಸರ್ಕಾರದ ವಿವಿಧ ಯೋಜನೆಗಳು ಯಶಸ್ವಿಯಾಗಬೇಕಾದರೆ ಬ್ಯಾಂಕ್‌ಗಳು ಅರ್ಹ ಫಲಾನುಭವಿಗಳಿಗೆ ಸಾಲ ನೀಡಬೇಕು ಹಾಗೂ ಫಲಾನುಭವಿಗಳು ಬ್ಯಾಂಕ್‌ಗಳಿಗೆ ಸಲ್ಲಿಸುವ ಸಾಲದ ಅರ್ಜಿಗಳನ್ನು ಬ್ಯಾಂಕ್ ಅಧಿಕಾರಿಗಳು ಕೂಲಕುಂಶವಾಗಿ ಪರಿಶೀಲಿಸಿ, ದಾಖಲೆಗಳ ಕೊರತೆಯಿದ್ದಲ್ಲಿ ಸಮರ್ಪಕ ದಾಖಲೆಗಳನ್ನು ಅರ್ಜಿದಾರರಿಂದ ಪಡೆದು ಸಾಲ ಮಂಜೂರು ಮಾಡುವಂತೆ ಹಾಗೂ ಸಣ್ಣಪುಟ್ಟ ಕಾರಣಗಳಿಗೆ ಅರ್ಜಿಗಳನ್ನು ತಿರಸ್ಕೃತಗೊಳಿಸದಂತೆ ಎಲ್ಲಾ ಬ್ಯಾಂಕ್‌ಗಳ ಅಧಿಕಾರಿಗಳಿಗೆ ಜಿಲ್ಲಾ ಪಂಚಾಯಿತಿ ಮುಖ್ಯ ಕಾರ್ಯ ನಿರ್ವಹಣಾಧಿಕಾರಿ ಈಶ್ವರ ಕುಮಾರ್ ಕಾಂದೂ ಸೂಚಿಸಿದ್ದಾರೆ.

VISTARANEWS.COM


on

Uttara Kannada ZP CEO Eshwar kumar kandu spoke at Lead Bank Progress Review Meeting in Karwar ZP Office
Koo

ಕಾರವಾರ: ಜಿಲ್ಲೆಯ ರೈತರ ಖಾತೆಗಳಿಗೆ ಜಮಾವಣೆಯಾಗಿರುವ ಬೆಳೆ ಪರಿಹಾರದ ಮೊತ್ತವನ್ನು, ಯಾವುದೇ ಕಾರಣಕ್ಕೂ ರೈತರು ಬ್ಯಾಂಕ್‌ಗಳಿಂದ ಪಡೆದ ಇತರೆ ಸಾಲದ ಮೊತ್ತಕ್ಕೆ ಸರಿಹೊಂದಿಸಿಕೊಳ್ಳದಂತೆ ಎಲ್ಲಾ ಬ್ಯಾಂಕ್ ಅಧಿಕಾರಿಗಳಿಗೆ ಜಿಲ್ಲಾ ಪಂಚಾಯಿತಿ ಮುಖ್ಯ ಕಾರ್ಯ ನಿರ್ವಹಣಾಧಿಕಾರಿ ಈಶ್ವರ ಕುಮಾರ್ ಕಾಂದೂ ಸೂಚನೆ (Uttara Kannada News) ನೀಡಿದರು.

ನಗರದ ಜಿಲ್ಲಾ ಪಂಚಾಯಿತಿ ಸಭಾಂಗಣದಲ್ಲಿ ಸೋಮವಾರ ನಡೆದ ಲೀಡ್ ಬ್ಯಾಂಕ್ ಪ್ರಗತಿ ಪರಿಶೀಲನಾ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದ ಅವರು, ರೈತರು ವಿವಿಧ ಬ್ಯಾಂಕ್‌ಗಳಲ್ಲಿ ಸಾಲ ಪಡೆದಿದ್ದು ಈ ಸಾಲದ ಮೊತ್ತಕ್ಕೆ ರೈತರ ಖಾತೆಗೆ ಜಮಾವಣೆಯಾದ ಬೆಳೆ ಪರಿಹಾರದ ಮೊತ್ತವನ್ನು ಯಾವುದೇ ಕಾರಣಕ್ಕೂ ಸಾಲದ ಮೊತ್ತಕ್ಕೆ ಸರಿಹೊಂದಿಸದಂತೆ ಮುಖ್ಯಮಂತ್ರಿಗಳು ಬರ ನಿರ್ವಹಣೆ ಕುರಿತ ಪ್ರಗತಿ ಪರಿಶೀಲನಾ ಸಭೆಯಲ್ಲಿ ನೀಡಿರುವ ನಿರ್ದೇಶನವನ್ನು ಎಲ್ಲಾ ಬ್ಯಾಂಕ್‌ಗಳ ಅಧಿಕಾರಿಗಳು ಪಾಲಿಸುವಂತೆ ತಿಳಿಸಿದರು.

ಸರ್ಕಾರದ ವಿವಿಧ ಯೋಜನೆಗಳ ಪ್ರಯೋಜನಕ್ಕಾಗಿ ಬ್ಯಾಂಕ್‌ಗಳ ಮೂಲಕ ಸಾಲ ಪಡೆಯಲು ಅರ್ಜಿ ಸಲ್ಲಿಸುವ ಫಲಾನುಭವಿಗಳಿಗೆ ಸಂಬಂಧಪಟ್ಟ ಇಲಾಖೆಯ ಅಧಿಕಾರಿಗಳು ಸರ್ಕಾರಿ ಯೋಜನೆಯ ಹಾಗೂ ಸಾಲ ಪಡೆಯಲು ಇರಬೇಕಾದ ಅರ್ಹತೆಗಳ ಬಗ್ಗೆ ವಿವರವಾದ ಮಾಹಿತಿ ನೀಡಬೇಕು.

ಇದನ್ನೂ ಓದಿ: Traffic Violation : ಪೆಟ್ರೋಲ್ ಖಾಲಿಯಾಗಿ ರಸ್ತೆಯಲ್ಲಿ ವಾಹನ ನಿಂತುಬಿಟ್ಟರೆ ಚಾಲಕನ ಮೇಲೆ ಕೇಸ್!

ಅರ್ಜಿಗಳ ಜತೆ ಸಲ್ಲಿಸಿದ ಪೂರಕ ದಾಖಲೆಗಳನ್ನು ಮತ್ತೊಮ್ಮೆ ಪರಿಶೀಲಿಸಿ ಫಲಾನುಭವಿಗಳಿಗೆ ಸರ್ಕಾರದ ಯೋಜನೆಗಳ ಪ್ರಯೋಜನ ದೊರೆಯುವಂತೆ ನೋಡಿಕೊಳ್ಳಬೇಕು. ಈ ಸಂಬಂಧ ಬ್ಯಾಂಕ್ ಮತ್ತು ಸಂಬಂಧಪಟ್ಟ ಇಲಾಖೆಯ ಅಧಿಕಾರಿಗಳು ಪರಸ್ಪರ ಸಮನ್ವಯದಿಂದ ಕಾರ್ಯ ನಿರ್ವಹಿಸಿ, ಸರ್ಕಾರಿ ಯೋಜನೆಗಳ ಸಂಪೂರ್ಣ ಯಶಸ್ವಿಗೆ ಕಾರ್ಯನಿರ್ವಹಿಸಬೇಕು ಎಂದರು.

ಜಿಲ್ಲೆಯ ಬ್ಯಾಂಕ್‌ಗಳಲ್ಲಿ ಸಾಲ ಮತ್ತು ಠೇವಣಿ ಅನುಪಾತವು ನಿಗದಿತ ಗುರಿಗಿಂತ ಕಡಿಮೆಯಿದ್ದು, ಸಾಲ ಮತ್ತು ಠೇವಣಿ ಅನುಪಾತವು ಹೆಚ್ಚಿಸಲು ಹೆಚ್ಚಿನ ಸಂಖ್ಯೆಯಲ್ಲಿ ಸಾಲಗಳನ್ನು ವಿತರಿಸುವಂತೆ ತಿಳಿಸಿದ ಅವರು, ಪಶುಪಾಲನೆ ಮತ್ತು ಮೀನುಗಾರಿಕಾ ಇಲಾಖೆ ವತಿಯಿಂದ ನೀಡುವ ಕಿಸಾನ್ ಕ್ರೆಡಿಟ್ ಕಾರ್ಡ್ ಯೋಜನೆಯಡಿ ಹೆಚ್ಚಿನ ಸಂಖ್ಯೆಯಲ್ಲಿ ಸಾಲ ವಿತರಿಸುವಂತೆ ಹಾಗೂ ಪಿಎಂ ಸ್ವನಿಧಿ ಯೋಜನೆಯಡಿಯಲ್ಲಿ ಜಿಲ್ಲೆಯ ಎಲ್ಲಾ ಬೀದಿ ಬದಿ ವ್ಯಾಪಾರಸ್ಥರಿಗೆ ಸಾಲ ನೀಡುವಂತೆ ಸೂಚಿಸಿದರು.

ಪ್ರಧಾನಮಂತ್ರಿ ಉದ್ಯೋಗ ಸೃಜನಾ ಯೋಜನೆಯಡಿ ಸ್ವಯಂ ಉದ್ಯೋಗ ಕೈಗೊಳ್ಳುವವರಿಗೆ, ಅರ್ಜಿ ಸಲ್ಲಿಸುವ ವಿಧಾನದ ಬಗ್ಗೆ ವಿವರವಾದ ಮಾಹಿತಿ ನೀಡಿ, ಈ ಬಗ್ಗೆ ಅರಿವು ಕಾರ್ಯಕ್ರಮಗಳನ್ನು ಆಯೋಜಿಸಿ, ಜಿಲ್ಲೆಯ ಪ್ರವಾಸೋದ್ಯಮ ಅಭಿವೃದ್ದಿಗೆ ಪೂರಕವಾದ ಚಟುವಟಿಕೆಗಳಿಗೆ ಆದ್ಯತೆಯಲ್ಲಿ ಸಾಲ ವಿತರಿಸುವಂತೆ ತಿಳಿಸಿದರು.

ಮುದ್ರಾ ಯೋಜನೆ ಮತ್ತು ಸ್ಟಾರ್ಟಪ್‌ಗಳಿಗೆ ಸಾಲ ವಿತರಿಸುವ ಕುರಿತಂತೆ ಎಲ್ಲಾ ಬ್ಯಾಂಕ್‌ಗಳು ಜಿಲ್ಲೆಯಾದ್ಯಂತ ಹೆಚ್ಚಿನ ಅರಿವು ಕಾರ್ಯಕ್ರಮಗಳನ್ನು ಆಯೋಜಿಸಿ, ಯುವ ಜನತೆಗೆ ಮತ್ತು ಸ್ವಯಂ ಉದ್ಯೋಗ ಕೈಗೊಳ್ಳುವವರಿಗೆ ನೆರವಾಗುವಂತೆ ಜಿಪಂ ಸಿಇಒ ಈಶ್ವರ ಕಾಂದೂ ತಿಳಿಸಿದರು.

ಇದನ್ನೂ ಓದಿ: Success Story: ಎರಡೇ ತಿಂಗಳಲ್ಲಿ ಆನ್ ಲೈನ್ ಮೂಲಕ 1,800 ಕೆ.ಜಿ. ಮಾವು ಮಾರಿದ ರಾಯಚೂರಿನ ರೈತ!

ಆರ್‌ಬಿಐ ಮ್ಯಾನೆಜರ್ ಅಲೋಕ ಕುಮಾರ್ ಸೀನ್ಹಾ ಮಾತನಾಡಿ, ಜಿಲ್ಲೆಯ ಎಲ್ಲಾ ಬ್ಯಾಂಕ್‌ಗಳು ಪ್ರತಿ ತಿಂಗಳು ತಮ್ಮ ವ್ಯಾಪ್ತಿಯ ಗ್ರಾಹಕರೊಂದಿಗೆ ತಪ್ಪದೇ ಸಭೆ ನಡೆಸುವಂತೆ ಮತ್ತು ಗ್ರಾಹಕರಿಗೆ ಆನ್‌ಲೈನ್ ವಂಚನೆಗಳ ಬಗ್ಗೆ ಎಚ್ಚರದಿಂದಿರುವ ಬಗ್ಗೆ ಜಾಗೃತಿ ಕಾರ್ಯಕ್ರಮಗಳನ್ನು ಆಯೋಜಿಸಬೇಕು, ಆನ್‌ಲೈನ್ ವಂಚನೆಗಳ ಬಗ್ಗೆ ಸೈಬರ್ ಕ್ರೈಂ ಹೆಲ್ಪ್‌ಲೈನ್ ಸಂಖ್ಯೆ 1930 ಗೆ ಮಾಹಿತಿ ನೀಡುವಂತೆ ತಿಳಿಸಿದರು.

ಕೆನರಾ ಬ್ಯಾಂಕ್ ಪ್ರಾದೇಶಿಕ ವ್ಯವಸ್ಥಾಪಕಿ ಬಿ.ಎಸ್. ಶುಭಾ ಮಾತನಾಡಿ, ಜಿಲ್ಲೆಯಲ್ಲಿ ಕಳೆದ ತ್ರೆಮಾಸಿಕ ಅವಧಿಯಲ್ಲಿ 7824 ಕೋಟಿ ಸಾಲ ವಿತರಣೆ ಗುರಿಗೆ 7748 ಕೋಟಿ ರೂ ಸಾಲ ವಿತರಿಸಿ 99.02% ಸಾಧನೆ ಮಾಡಲಾಗಿದೆ. ಕೃಷಿ ವಲಯಕ್ಕೆ 2824 ಕೋಟಿ, ಮಧ್ಯಮ ಮತ್ತು ಸಣ್ಣ ವಲಯಕ್ಕೆ 2616 ಕೋಟಿ ಸಾಲ ವಿತರಿಸಲಾಗಿದೆ, ಗೃಹ ನಿರ್ಮಾಣ ಮತ್ತು ಶೈಕ್ಷಣಿಕ ಸಾಲ ವಿತರಣೆಯಲ್ಲಿ ಬ್ಯಾಂಕ್‌ಗಳು ಇನ್ನೂ ಹೆಚ್ಚಿನ ಪ್ರಗತಿ ಸಾಧಿಸಬೇಕಿದೆ. ಜಿಲ್ಲೆಯ ಸಾಲ ಮತ್ತು ಠೇವಣಿ ಅನುಪಾತ ಕಳೆದ ಸಾಲಿಗೆ ಹೋಲಿಸಿದಲ್ಲಿ ಪ್ರಗತಿಯಾಗಿದ್ದು, ಸಾಲ ನೀಡಿಕೆ ಪ್ರಮಾಣ ಇನ್ನೂ ಹೆಚ್ಚಳವಾಗಬೇಕಿದೆ ಎಂದರು.

ಇದನ್ನೂ ಓದಿ: Gold Rate Today: ಚಿನ್ನದ ಬೆಲೆಯಲ್ಲಿ ಕೊಂಚ ಏರಿಕೆ; ಬಂಗಾರದ ಮಾರುಕಟ್ಟೆಯಲ್ಲಿ ಇಂದಿನ ಧಾರಣೆ ಹೀಗಿದೆ

ಲೀಡ್ ಬ್ಯಾಂಕ್ ಮ್ಯಾನೇಜರ್ ರೇವತಿ ಸುಧಾಕರ್, ನಬಾರ್ಡ್ ಡಿಡಿಎಂ ಸುಶೀಲ್ ನಾಯ್ಕ, ಜಿಲ್ಲಾ ಪಂಚಾಯತ್ ಮುಖ್ಯ ಲೆಕ್ಕಾಧಿಕಾರಿ ಆನಂದಸಾ ಹಬೀಬ, ಮುಖ್ಯ ಯೋಜನಾಧಿಕಾರಿ ವಿನೋದ ಅಣ್ವೇಕರ್ ಹಲವು ಮಾಹಿತಿ ನೀಡಿದರು. ಸಭೆಯಲ್ಲಿ ಜಿಲ್ಲೆಯ ವಿವಿಧ ಇಲಾಖೆಗಳ ಜಿಲ್ಲಾ ಮಟ್ಟದ ಅಧಿಕಾರಿಗಳು ಹಾಗೂ ಬ್ಯಾಂಕ್‌ಗಳ ಅಧಿಕಾರಿಗಳು ಉಪಸ್ಥಿತರಿದ್ದರು.

Continue Reading
Advertisement
Forbes World Billionaires List
ವಾಣಿಜ್ಯ3 mins ago

Forbes World Billionaires List: ವಿಶ್ವದ ಶ್ರೀಮಂತ ಮಹಿಳೆಯರು; ಭಾರತದ ಸಾವಿತ್ರಿ ಜಿಂದಾಲ್‌ಗೆ ಎಷ್ಟನೇ ಸ್ಥಾನ?

Cannes 2024 Sandalwood Actress Interview
ಫ್ಯಾಷನ್5 mins ago

Cannes 2024 Sandalwood Actress Interview: ಕಾನ್‌ನಲ್ಲಿ ಹ್ಯಾಟ್ರಿಕ್‌ ವಾಕ್‌ ಮಾಡಿದ ಸ್ಯಾಂಡಲ್‌ವುಡ್‌ ನಟಿ ಇತಿ ಆಚಾರ್ಯ ಹೇಳಿದ್ದೇನು?

Delhi Temperature
ದೇಶ10 mins ago

Delhi Temperature: ದೆಹಲಿಯಲ್ಲಿ 52 ಡಿಗ್ರಿ ಸೆಲ್ಸಿಯಸ್‌ ತಾಪಮಾನ; ದೇಶದಲ್ಲೇ ಇದುವರೆಗಿನ ಗರಿಷ್ಠ ಟೆಂಪರೇಚರ್!

Babar Azam
ವೈರಲ್ ನ್ಯೂಸ್27 mins ago

Babar Azam: ಫೋಟೋ ತೆಗೆಯಲು ಬಂದ ಅಭಿಮಾನಿಗಳಿಗೆ ಬೈದು ಓಡಿಸಿದ ಬಾಬರ್ ಅಜಂ; ವಿಡಿಯೊ ವೈರಲ್​

Madhu Chopra on Priyanka Chopra-Nick Jonas' age gap
ಬಾಲಿವುಡ್35 mins ago

Madhu Chopra: ಮಗಳು-ಅಳಿಯನ ವಯಸ್ಸಿನ ಅಂತರ ಬಗ್ಗೆ ಪ್ರಿಯಾಂಕಾ ಚೋಪ್ರಾ ತಾಯಿ ಹೇಳಿದ್ದೇನು?

Tamarind Fruit Benefits
ಆರೋಗ್ಯ35 mins ago

Tamarind Fruit Benefits: ಜೀರ್ಣಶಕ್ತಿ ಹೆಚ್ಚಿಸಿ ತೂಕ ಇಳಿಸಲು ಹುಣಸೇ ಹಣ್ಣು ಸುಲಭದ ಉಪಾಯ!

Karnataka Weather
ಮಳೆ51 mins ago

Karnataka Weather: ದಕ್ಷಿಣ ಒಳನಾಡು, ಕರಾವಳಿ ಜಿಲ್ಲೆಗಳಲ್ಲಿ ಇಂದು ಸಂಜೆ ಭಾರಿ ಮಳೆ ಸಾಧ್ಯತೆ!

Viral News
ವೈರಲ್ ನ್ಯೂಸ್1 hour ago

Viral News: 10 ಅಡಿಯ ದೈತ್ಯ ಮೊಸಳೆಯಿಂದ ಕಬ್ಬಿಣದ ಗೇಟು ಹಾರಲು ಯತ್ನ; ಮೈ ಜುಮ್ಮೆನ್ನಿಸುವ ವಿಡಿಯೊ ಇಲ್ಲಿದೆ

Rashmika Mandanna shares why she doesn’t speak English
ಸಿನಿಮಾ1 hour ago

Rashmika Mandanna: ಸಮಾರಂಭಗಳಲ್ಲಿ ರಶ್ಮಿಕಾ ಇಂಗ್ಲೀಷ್‌ ಏಕೆ ಮಾತನಾಡಲ್ಲ? ನಟಿ ಕೊಟ್ಟ ಸ್ಪಷ್ಟನೆ ಏನು?

Bhavani Revanna
ಕರ್ನಾಟಕ1 hour ago

Bhavani Revanna: ಭವಾನಿ ರೇವಣ್ಣ ‘ಜಾಮೀನು’ ತೀರ್ಪು ಕಾಯ್ದಿರಿಸಿದ ಕೋರ್ಟ್;‌ ಮೇ 31 ಅಮ್ಮ-ಮಗನಿಗೆ ಬಿಗ್‌ ಡೇ!

Sharmitha Gowda in bikini
ಕಿರುತೆರೆ8 months ago

Geetha Serial Kannada: ನಿದ್ದೆ ಕದ್ದ ಚೋರಿ! ನಟಿ `ಭಾನುಮತಿ’ ಹಾಟ್‌ ಪೋಟೊಗಳಿಗೆ ಫ್ಯಾನ್ಸ್ ಫುಲ್ ಫಿದಾ

Kannada Serials
ಕಿರುತೆರೆ8 months ago

Kannada Serials TRP: 2ನೇ ಸ್ಥಾನದಲ್ಲಿ 2 ಧಾರಾವಾಹಿಗಳು; ಟಿಆರ್‌ಪಿ ರೇಸ್‌ನಲ್ಲಿಲ್ಲ ಭಾಗ್ಯಲಕ್ಷ್ಮೀ!

Bigg Boss- Saregamapa 20 average TRP
ಕಿರುತೆರೆ7 months ago

Kannada Serials TRP: ಏಳನೇ ಸ್ಥಾನಕ್ಕೆ ʻಅಮೃತಧಾರೆʼ ಕುಸಿತ; ಬಿಗ್‌ ಬಾಸ್‌-ಸರಿಗಮಪ ಟಿಆರ್‌ಪಿ ಎಷ್ಟು?

galipata neetu
ಕಿರುತೆರೆ6 months ago

Kanyadana Serial: ಕಿರುತೆರೆಗೆ ಮತ್ತೆ ಎಂಟ್ರಿ ಕೊಟ್ಟ ʻಗಾಳಿಪಟʼ ಖ್ಯಾತಿಯ ʻನೀತುʼ!

Kannada Serials
ಕಿರುತೆರೆ8 months ago

Kannada Serials TRP: ನಾಲ್ಕನೇ ಸ್ಥಾನಕ್ಕೆ ಕುಸಿತ ಕಂಡ ʻಸೀತಾ ರಾಮʼ; ಟಿಆರ್‌ಪಿ ರೇಸ್‌ಗೆ ʻಭಾಗ್ಯಲಕ್ಷ್ಮಿʼ ಬ್ಯಾಕ್‌!

Kannada Serials
ಕಿರುತೆರೆ8 months ago

Kannada Serials TRP: ಟಿಆರ್‌ಪಿಯಲ್ಲಿ ʻಭಾಗ್ಯಲಕ್ಷ್ಮೀʼ ಹವಾ; ʻಪುಟ್ಟಕ್ಕನ ಮಕ್ಕಳುʼ ಧಾರಾವಾಹಿಗೆ ಸಂಕಷ್ಟ!

Bigg Boss' dominates TRP; Sita Rama fell to the sixth position
ಕಿರುತೆರೆ7 months ago

Kannada Serials TRP: ಟಿಆರ್‌ಪಿಯಲ್ಲಿ ʻಬಿಗ್ ಬಾಸ್ʼದೇ ಮೇಲುಗೈ; 6ನೇ ಸ್ಥಾನಕ್ಕೆ ಕುಸಿದ ʻಸೀತಾ ರಾಮʼ

geetha serial Dhanush gowda engagement
ಕಿರುತೆರೆ6 months ago

Dhanush Gowda: ಗೀತಾ ಧಾರಾವಾಹಿ ನಟನ ನಿಶ್ಚಿತಾರ್ಥ; ಭವ್ಯಾಳ ಕಮೆಂಟ್‌ ಬಾಕ್ಸ್‌ ಆಫ್‌!

varun
ಕಿರುತೆರೆ6 months ago

Brindavana Serial: ʼಬೃಂದಾವನʼ ಧಾರಾವಾಹಿಯಲ್ಲಿ ದೊಡ್ಡ ಟ್ವಿಸ್ಟ್‌; ಪ್ರಮುಖ ಪಾತ್ರಧಾರಿಯೇ ಬದಲು

Kannada Serials
ಕಿರುತೆರೆ9 months ago

Kannada Serials TRP: ಟಿಆರ್‌ಪಿಯಲ್ಲಿ ಏರಿಕೆ ಕಂಡ ʻಅಮೃತಧಾರೆʼ; ʻಗಟ್ಟಿಮೇಳʼಕ್ಕೆ ನಾಲ್ಕನೇ ಸ್ಥಾನ!

Karnataka weather Forecast
ಮಳೆ22 hours ago

Karnataka Weather : ಚಿಕ್ಕಮಗಳೂರಲ್ಲಿ ಭಾರಿ ಮಳೆ; ಯಾದಗಿರಿಯಲ್ಲಿ ಕರೆಂಟ್‌ ಕಟ್‌, ಜನರೇಟರ್‌ನಿಂದ ಮೊಬೈಲ್‌ಗಳಿಗೆ ಚಾರ್ಜಿಂಗ್‌!

tumkur murder
ತುಮಕೂರು1 day ago

Tumkur Murder : ಮಗುವಿನ ಮುಂದೆಯೇ ಹೆಂಡತಿಯ ಕತ್ತು, ದೇಹವನ್ನು ಕತ್ತರಿಸಿ ಬಿಸಾಡಿದ ದುಷ್ಟ

Karnataka Weather Forecast
ಮಳೆ2 days ago

Karnataka Weather : ಕಡಲತೀರದಲ್ಲಿ ಅಲೆಗಳ ಅಬ್ಬರ, ಪ್ರವಾಸಿಗರಿಗೆ ಕಟ್ಟೆಚ್ಚರ; ನಾಳೆಯೂ ಗಾಳಿ ಸಹಿತ ಮಳೆ ಅಬ್ಬರ

Karnataka Rain
ಮಳೆ3 days ago

Karnataka Rain : ಯಾದಗಿರಿಯಲ್ಲಿ ಬಿರುಗಾಳಿ ಸಹಿತ ಮಳೆ; ಸಿಡಿಲು ಬಡಿದು ಎಮ್ಮೆಗಳು ಸಾವು

Basavanagudi News
ಬೆಂಗಳೂರು3 days ago

Basavanagudi News : ಪೂಜಾ ಸಾಮಗ್ರಿಗೆ ಒನ್‌ ಟು ಡಬಲ್‌ ರೇಟ್‌; ದೊಡ್ಡ ಗಣಪತಿ ದೇಗುಲದಲ್ಲಿ ಕೈ ಕೈ ಮಿಲಾಯಿಸಿದ ಭಕ್ತರು-ವ್ಯಾಪಾರಿಗಳು

Karnataka Rain
ಮಳೆ4 days ago

Karnataka Rain : ಭಾರಿ ಮಳೆಗೆ ರಸ್ತೆ ಕಾಣದೆ ರಾಜಕಾಲುವೆಗೆ ಉರುಳಿದ ಆಟೋ; ಚಾಲಕ ಸ್ಥಳದಲ್ಲೇ ಸಾವು

dina bhavishya read your daily horoscope predictions for May 23 2024
ಭವಿಷ್ಯ7 days ago

Dina Bhavishya : 12 ರಾಶಿಯವರ ಇಂದಿನ ಭವಿಷ್ಯ ಹೇಗಿದೆ? ಯಾರಿಗೆ ಶುಭ, ಯಾರಿಗೆ ಅಶುಭ ಫಲ?

Karnataka Weather Forecast
ಮಳೆ1 week ago

Karnataka Weather : ಮುಂದುವರಿಯಲಿದೆ ವರುಣಾರ್ಭಟ; ಬೆಂಗಳೂರಲ್ಲೂ ಭಾರಿ ಮಳೆ ನಿರೀಕ್ಷೆ!

Karnataka Rain
ಮಳೆ1 week ago

Karnataka Rain : ಭಾರಿ ಮಳೆಗೆ ಕರೆಂಟ್‌ ಕಟ್‌, ಕತ್ತಲಲ್ಲೇ ರೋಗಿಗಳಿಗೆ ಟ್ರೀಟ್‌ಮೆಂಟ್‌; ಮರ ಬಿದ್ದರೂ ಪಾರಾದ ತಾಯಿ-ಮಗ

Love Case Father throws hot water on man who loved his daughter for coming home
ಕೊಡಗು1 week ago

Love Case : ಮನೆಗೆ ಬಂದ ಪ್ರೇಮಿಗೆ ಕೊತ ಕೊತ ಕುದಿಯುವ ನೀರು ಎರಚಿದ ಯುವತಿ ತಂದೆ!

ಟ್ರೆಂಡಿಂಗ್‌