Operation Hasta : ಜೆಡಿಎಸ್‌ನಲ್ಲೂ ʼಹಸ್ತʼಕ್ಷೇಪ; ಆಪರೇಷನ್‌ ಹಸ್ತದ ಬಗ್ಗೆ ಶಾಸಕ ಮಂಜುನಾಥ್‌ ಸ್ಫೋಟಕ ಸುಳಿವು! - Vistara News

ಕರ್ನಾಟಕ

Operation Hasta : ಜೆಡಿಎಸ್‌ನಲ್ಲೂ ʼಹಸ್ತʼಕ್ಷೇಪ; ಆಪರೇಷನ್‌ ಹಸ್ತದ ಬಗ್ಗೆ ಶಾಸಕ ಮಂಜುನಾಥ್‌ ಸ್ಫೋಟಕ ಸುಳಿವು!

Operation Hasta : ರಾಜ್ಯ ರಾಜಕೀಯದಲ್ಲಿ ಆಪರೇಷನ್‌ ಹಸ್ತ ಭಾರಿ ಸದ್ದು ಮಾಡುತ್ತಿದೆ. ಬಿಜೆಪಿ ಶಾಸಕರಷ್ಟೇ ಅಲ್ಲದೆ ಜೆಡಿಎಸ್‌ ಶಾಸಕರನ್ನು ಸೆಳೆಯಲೂ ಮುಂದಾಗಿರುವ ಕಾಂಗ್ರೆಸ್‌ ಈ ನಿಟ್ಟಿನಲ್ಲಿ ತನ್ನ ಕಾರ್ಯತಂತ್ರವನ್ನು ಹೆಣೆಯುತ್ತಿದೆ. ಈಗಾಗಲೇ ತಮ್ಮನ್ನು ಸಂಪರ್ಕಿಸಿರುವ ಬಗ್ಗೆ ಜೆಡಿಎಸ್‌ ಶಾಸಕ ಸಮೃದ್ಧಿ ಮಂಜುನಾಥ್‌ ಹೇಳಿದ್ದಾರೆ.

VISTARANEWS.COM


on

JDS MLA Samriddhi Manjunath with Congress and JDS logo
ಮಹತ್ವದ, ಕುತೂಹಲಕರ ಸುದ್ದಿಗಾಗಿ ಫಾಲೊ ಮಾಡಿ
Koo

ಬೆಂಗಳೂರು: ಮುಂಬರುವ ಲೋಕಸಭಾ ಚುನಾವಣೆ (Lok Sabha Election 2024) ಹಿನ್ನೆಲೆಯಲ್ಲಿ ಕಾಂಗ್ರೆಸ್‌ ಸರ್ಕಾರ (Congress Government) ರಾಜ್ಯದಲ್ಲಿ ಈಗನಿಂದಲೇ ಭಾರಿ ರಣತಂತ್ರವನ್ನು ಹೆಣೆಯುತ್ತಿದೆ. ಈ ಮೂಲಕ ರಾಜ್ಯ ರಾಜಕೀಯದಲ್ಲಿ (Karnataka Politics) ಸಾಕಷ್ಟು ಬದಲಾವಣೆ ತರುವ ನಿಟ್ಟಿನಲ್ಲಿ ತನ್ನ ತಂತ್ರಗಾರಿಕೆಯನ್ನು ಹೆಣೆಯುತ್ತಿದೆ. ರಾಜ್ಯದ 28 ಲೋಕಸಭಾ ಕ್ಷೇತ್ರದಲ್ಲಿ ಶತಾಯಗತಾಯ 20 ಸೀಟನ್ನು ಗೆಲ್ಲುವ ಗುರಿ ಇಟ್ಟುಕೊಂಡಿರುವ ಕಾಂಗ್ರೆಸ್‌ ಈಗ ಆಪರೇಷನ್‌ ಹಸ್ತ (Operation Hasta) ಕಾರ್ಯಾಚರಣೆಗೂ ಕೈಹಾಕಿದೆ. ಜತೆಗೆ ಪ್ರಮುಖ ಜಾತಿಗಳ ಶಾಸಕರನ್ನು ಸೆಳೆದರೆ ಆ ಸಮುದಾಯಗಳ ಮತಗಳು ಕ್ರೋಢೀಕರಣವಾಗುತ್ತದೆ ಎಂಬ ನಿಟ್ಟಿನಲ್ಲಿಯೂ ಪ್ಲ್ಯಾನ್‌ ಮಾಡಿಕೊಳ್ಳಲಾಗಿದೆ ಎನ್ನಲಾಗುತ್ತಿದೆ. ಇದಕ್ಕಾಗಿ ಬಿಜೆಪಿ ಮತ್ತು ಜೆಡಿಎಸ್‌ ಶಾಸಕರ ಮೇಲೆ ಕಣ್ಣಿಟ್ಟಿದ್ದು, ಇದರ ಪ್ರಕಾರವಾಗಿ ಕೆಲವರ ಜತೆ ಮಾತುಕತೆ ಸಹ ನಡೆದಿದೆ ಎನ್ನಲಾಗಿದೆ. ಈ ಎಲ್ಲ ಬೆಳವಣಿಗೆಗೆ ಪುಷ್ಟಿ ನೀಡುವಂತೆ ಈಗ ಮುಳಬಾಗಿಲು ಜೆಡಿಎಸ್ ಶಾಸಕ ಸಮೃದ್ಧಿ ಮಂಜುನಾಥ್ (JDS MLA Samriddhi Manjunath) ಸ್ಫೋಟಕ ಹೇಳಿಕೆಯನ್ನು ನೀಡಿದ್ದಾರೆ. ಆಪರೇಷನ್‌ ಹಸ್ತದ ಭಾಗವಾಗಿ ತಮಗೆ ದೆಹಲಿಗೆ ಬರುವಂತೆ ಕಾಂಗ್ರೆಸ್‌ ನಾಯಕರು ಕರೆದಿದ್ದರು. ಆದರೆ, ನಾನು ಹೋಗಲಿಲ್ಲ ಎಂದು ಹೇಳಿಕೆ ನೀಡಿದ್ದಾರೆ. ಇದೀಗ ರಾಜಕೀಯ ವಲಯದಲ್ಲಿ ಸಾಕಷ್ಟು ಚರ್ಚೆಗೆ ಗ್ರಾಸವಾಗಿದೆ.

ಕೆಪಿಸಿಸಿ ಅಧ್ಯಕ್ಷರೂ ಆಗಿರುವ ಡಿಸಿಎಂ ಡಿ.ಕೆ. ಶಿವಕುಮಾರ್‌ (KPCC president and Deputy CM DK Shivakumar) ಅವರು ಪಕ್ಷ ಸಂಘಟನೆ ದೃಷ್ಟಿಯಿಂದ ಬಹಳ ವೇಗವಾಗಿ ಹೆಜ್ಜೆ ಇಡುತ್ತಿದ್ದಾರೆ. ಎಲ್ಲದಕ್ಕೂ ಸೈ ಎನ್ನುವ ಮನಃಸ್ಥಿತಿಯಲ್ಲಿ ಅವರು ಮುನ್ನುಗ್ಗುತ್ತಿರುವಂತೆ ಕಂಡುಬರುತ್ತಿದೆ. ಈ ನಡುವೆ ಕಳೆದ ಬಾರಿ ಕಾಂಗ್ರೆಸ್‌ ಸರ್ಕಾರವನ್ನು ಬೀಳಿಸಿ, ಆ ಪಕ್ಷವನ್ನು ತೊರೆದು ಬಿಜೆಪಿ ಸೇರಿದ್ದವರನ್ನೇ ಮೊದಲ ಟಾರ್ಗೆಟ್‌ ಮಾಡಿಕೊಳ್ಳಲಾಗಿದೆ ಎಂದು ಹೇಳಲಾಗುತ್ತಿದ್ದು, “ಘರ್‌ ವಾಪ್ಸಿ” (Ghar Wapsi) ಹೆಸರಿನಲ್ಲಿ ಅವರನ್ನು ಮತ್ತೆ ಪಕ್ಷಕ್ಕೆ ಕರೆತರುವ ನಿಟ್ಟಿನಲ್ಲಿ ಮಾತುಕತೆಗಳು ನಡೆದಿವೆ ಎಂದೂ ಹೇಳಲಾಗುತ್ತಿದೆ. ಇದರ ಭಾಗವಾಗಿ ಯಶವಂತಪುರ ಶಾಸಕ ಎಸ್.ಟಿ. ಸೋಮಶೇಖರ್‌ ಅವರ ಬೆಂಬಲಿಗರು ಈಗಾಗಲೇ ಕಾಂಗ್ರೆಸ್‌ ಸೇರ್ಪಡೆಗೊಂಡಿದ್ದಾರೆ. ಎಸ್‌ಟಿಎಸ್‌ ಸಹ ಮಾನಸಿಕವಾಗಿ ಕಾಂಗ್ರೆಸ್‌ನಲ್ಲಿದ್ದಾರೆಂದೇ ಹೇಳಲಾಗುತ್ತಿದೆ. ಜತೆಗೆ ಯಲ್ಲಾಪುರ ಶಾಸಕ ಶಿವರಾಂ ಹೆಬ್ಬಾರ್ ಸಹ ಕಾಂಗ್ರೆಸ್‌ ಸೇರ್ಪಡೆ ಬಗ್ಗೆ ದಟ್ಟ ವದಂತಿ ಹಬ್ಬಿದೆ. ಇವರೂ ಸೇರಿ ಇನ್ನೂ ಹಲವು ಬಿಜೆಪಿ ಶಾಸಕರು, ಮಾಜಿ ಶಾಸಕರ ಹೆಸರು ಕೇಳಿಬರುತ್ತಿದೆ. ಈ ನಡುವೆ ಕೋಲಾರ ಜಿಲ್ಲೆಯ ಮುಳಬಾಗಿಲು ಶಾಸಕ, ದಲಿತ ಮುಖಂಡ ಸಮೃದ್ಧಿ ಮಂಜುನಾಥ್‌ ಅವರನ್ನೂ ಸಹ ಸೆಳೆಯಲು ಕಾಂಗ್ರೆಸ್‌ ಪ್ಲ್ಯಾನ್‌ ಮಾಡಿಕೊಂಡಿತ್ತು. ಈ ನಿಟ್ಟಿನಲ್ಲಿ ಅವರನ್ನು ಸಂಪರ್ಕ ಮಾಡಿತ್ತು ಎಂಬ ವಿಚಾರ ಈಗ ಬಯಲಾಗಿದೆ.

ಸಮೃದ್ಧಿ ಮಂಜುನಾಥ್ ಆರೋಪ ಏನು?

ರಾಜ್ಯದಲ್ಲಿ ಆಪರೇಷನ್ ಹಸ್ತ ನಡೆಯುತ್ತಿದೆ. ಕಾಂಗ್ರೆಸ್‌ನವರು ನಮ್ಮ ಪಕ್ಷದ (ಜೆಡಿಎಸ್) ಶಾಸಕರನ್ನು ಸೆಳೆಯಲು ಪ್ರಯತ್ನ ಮಾಡುತ್ತಿದ್ದಾರೆ. ನನಗೆ ಈ ಸಂಬಂಧ ಮಾತನಾಡಲು ದೆಹಲಿಗೆ ಬರುವಂತೆ‌ ಒತ್ತಡ ತಂದಿದ್ದರು. ಆದರೆ, ನಾನು ಅವರ ಒತ್ತಡಕ್ಕೆ ಮಣಿಯಲಿಲ್ಲ. ಜತೆಗೆ ದೆಹಲಿಗೂ ಹೋಗಲಿಲ್ಲ. ಬಂಗಾರಪೇಟೆ ಶಾಸಕ ಎಸ್.ಎನ್‌. ನಾರಾಯಣಸ್ವಾಮಿ ಅವರು ನನ್ನನ್ನು ಸಂಪರ್ಕ ಮಾಡಿದ್ದರು ಎಂದು ಜೆಡಿಎಸ್ ಶಾಸಕ ಸಮೃದ್ಧಿ ಮಂಜುನಾಥ್ ಮಾಧ್ಯಮದವರಿಗೆ ಪ್ರತಿಕ್ರಿಯೆ ನೀಡಿದ್ದಾರೆ.

ನಾನು ಜೆಡಿಎಸ್‌ನ ನಿಷ್ಠಾವಂತ ಕಾರ್ಯಕರ್ತನಾಗಿದ್ದೇನೆ. ಶಾಸಕರಾಗಿರುವುದರಿಂದ ಅನುದಾನಕ್ಕಾಗಿ ಸಿಎಂ ಇಲ್ಲವೇ ಡಿಸಿಎಂ ಅವರನ್ನು ಭೇಟಿಯಾಗಿ ಚರ್ಚೆ ನಡೆಸುವುದು ಸಾಮಾನ್ಯ ಆದರೆ, ಇದುವರೆಗೂ ಜೆಡಿಎಸ್ ಶಾಸಕರು ಸೌಜನ್ಯಕ್ಕೂ ಅನುದಾನವನ್ನು ಕೇಳಲು ಸಿಎಂ ಸಿದ್ದರಾಮಯ್ಯ ಅವರ ಬಳಿಗಾಗಲೀ, ಉಪ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್‌ ಅವರ ಬಳಿಗಾಗಲೀ ಹೋಗಿಲ್ಲ. ಒಂದು ವೇಳೆ ಭೇಟಿ ಮಾಡಿದರೆ ಪಕ್ಷ ಬಿಡುತ್ತಾರೆ ಎಂದೆಲ್ಲ ಸುದ್ದಿ ಹಬ್ಬಿಸಿ ಬಿಡುತ್ತಾರೆ. ಆ ಭಯಕ್ಕೇ ಇದುವರೆಗೂ ನಾವ್ಯಾರೂ ಸಿಎಂ, ಡಿಸಿಎಂ ಅವರನ್ನು ಭೇಟಿ ಮಾಡಿಲ್ಲ ಎಂದು ಸಮೃದ್ಧಿ ಮಂಜುನಾಥ್‌ ಹೇಳಿದ್ದಾರೆ.

​ನಾನೆಂದೂ ಜೆಡಿಎಸ್ ಬಿಡುವ ಪ್ರಶ್ನೆಯೇ ಇಲ್ಲ. ನಾನು ದಳ ಪಕ್ಷದ ಶಿಸ್ತಿನ ಸಿಪಾಯಿ. ಜೆಡಿಎಸ್ ಪಕ್ಷದ 19 ಶಾಸಕರು,‌‌ ಮಾಜಿ ಶಾಸಕರು ಶೀಘ್ರದಲ್ಲಿ ಒಂದು ಸಮಾರಂಭದ ಮೂಲಕ ಸೇರುತ್ತೇವೆ. ನಾವು ಯಾರೂ ಸಹ ಪಕ್ಷವನ್ನು ತೊರೆಯುವುದಿಲ್ಲ. ಕಾಂಗ್ರೆಸ್‌ನವರ ಆಪರೇಷನ್ ನಮ್ಮ ಮುಂದೆ ನಡೆಯುವುದಿಲ್ಲ. ಈಗ ಹಬ್ಬಿರುವ ಆಪರೇಷನ್‌ ಹಸ್ತ ಅವರ ಗಿಮಿಕ್‌ ಅಷ್ಟೇ. ಕಾಂಗ್ರೆಸ್ ಹೈಕಮಾಂಡ್ ಅವರಿಗೆ 20 ಲೋಕಸಭಾ ಸ್ಥಾನ ಗೆಲ್ಲಲು ಟಾರ್ಗೆಟ್ ನೀಡಿದೆ. ಹಾಗಾಗಿ ಈಗ ಆಪರೇಷನ್ ಹಸ್ತದ ನಾಟಕ ಎಂದು ಸಮೃದ್ಧಿ ಮಂಜುನಾಥ್‌ ಕಿಡಿಕಾರಿದ್ದಾರೆ.

ಇದನ್ನೂ ಓದಿ: Weather Report : ರಾಜ್ಯದ ಹಲವೆಡೆ ಇಂದು ಚಿಟಪಟ ಮಳೆಗೆ ಗುಡುಗು, ಮಿಂಚು ಸಾಥ್

ಸರ್ಕಾರ ಇರೋದೇ ಡೌಟು

ಕಾಂಗ್ರೆಸ್‌ನಲ್ಲಿಯೇ ರಿವರ್ಸ್ ಆಪರೇಷನ್ ನಡೆಯುತ್ತಿದೆ. ಈ ಸರ್ಕಾರ ಇರುವುದೇ ಅನುಮಾನವಾಗಿದೆ. ರಾಜಕಾರಣವು ಐಪಿಎಲ್ ಮ್ಯಾಚ್ ಇದ್ದ ಹಾಗೆ. ಯಾರು ಯಾವ ಟೀಂ ಟೀಶರ್ಟ್ ಹಾಕಿಕೊಂಡು ಫೀಲ್ಡಿಗೆ ಬರುತ್ತಾರೆ ಎಂಬುದು ಲೋಕಸಭಾ ಚುನಾವಣೆ ಆದ ಮೇಲೆ ಸ್ಪಷ್ಟವಾಗಲಿದೆ. ಕಾಂಗ್ರೆಸ್ ಪಕ್ಷ ಈಗ ವರ್ಗಾವಣೆ ದಂಧೆ ಹಿಂದೆ ಬಿದ್ದಿದೆ. ಸದ್ಯದಲ್ಲೇ ಎಲ್ಲವೂ ಬಹಿರಂಗ ಆಗಲಿದೆ ಎಂದು ಸಮೃದ್ಧಿ ಮಂಜುನಾಥ್‌ ಹೊಸ ಆಪರೇಷನ್‌ ಬಾಂಬ್‌ ಹಾಕಿದ್ದಾರೆ.

ಕ್ಷಣ ಕ್ಷಣದ ಮಾಹಿತಿಗಾಗಿ Vistara News FaceBook ಪೇಜ್ ಫಾಲೋ ಮಾಡಿ
ಮಹತ್ವದ ಮಾಹಿತಿಗಾಗಿ ವಿಸ್ತಾರ ನ್ಯೂಸ್ ಆ್ಯಪ್ ಉಚಿತವಾಗಿ ಡೌನ್ ಲೋಡ್ ಮಾಡಿಕೊಳ್ಳಿ: Andriod App | IOS App
Continue Reading
Click to comment

Leave a Reply

Your email address will not be published. Required fields are marked *

ಪ್ರಮುಖ ಸುದ್ದಿ

V Somanna : ತಮ್ಮನ್ನು ಕಡೆಗಣಿಸಿದ ಜಿಲ್ಲಾಧಿಕಾರಿ, ಸಿಇಒಗೆ ಕೇಂದ್ರ ಸಚಿವ ಸೋಮಣ್ಣ ತರಾಟೆ

V Somanna :ಸೋಮಣ್ಣ ಸ್ವಾಗತಕ್ಕೆ ಸಹಾಯಕ ಆಯುಕ್ತರನ್ನು ಕಳುಹಿಸಿದ್ದರು. ಅವರಿಬ್ಬರೂ ಜಿಲಾಸ್ತುವಾರಿ ಸಚಿವ ಜಿ.ಪರಮೇಶ್ವರ್ ಪ್ರವಾಸದ ಕಾರ್ಯಕ್ರಮಗಳಿಗೆ ಹಾಜರಾಗಲು ಹೋಗಿದ್ದರು. ಅವರಿಬ್ಬರ ನಡೆಯಿಂದ ಕೆಂಡಾಮಂಡಲರಾದ ಸೋಮಣ್ಣ ಫೋನ್ ಮೂಲಕವೇ ತರಾಟೆಗೆ ತೆಗೆದುಕೊಂಡಿದ್ದಾರೆ.

VISTARANEWS.COM


on

V Somanna
Koo

ತುಮಕೂರು: ಕೇಂದ್ರದ ಎನ್​ಡಿಎ ಸರ್ಕಾರದಲ್ಲಿ ಜಲಶಕ್ತಿ ರಾಜ್ಯ ಖಾತೆ ಸಚಿವರಾಗಿ ಅಧಿಕಾರ ವಹಿಸಿಕೊಂಡಿರುವ ವಿ. ಸೋಮಣ್ಣ (V Somanna) ಅವರು ತಮ್ಮ ಸ್ವಕ್ಷೇತ್ರ ತುಮಕೂರಿಗೆ ಶುಕ್ರವಾರ ಮೊದಲ ಬಾರಿ ಆಗಮಿಸಿದ್ದರು. ಈ ವೇಳೆ ಶಿಷ್ಟಾಚಾರ ಉಲ್ಲಂಘಿಸಿ ಸ್ಥಳದಲ್ಲಿ ಹಾಜರಿರದ ಜಿಲ್ಲಾಧಿಕಾರಿ ಹಾಗೂ ಮುಖ್ಯ ಕಾರ್ಯನಿರ್ವಹಣಾಧಿಕಾರಿಯನ್ನು ತರಾಟೆಗೆ ತೆಗೆದುಕೊಂಡರು.

ಸೋಮಣ್ಣ ಅವರದ್ದು ಪೂರ್ವ ನಿಗದಿತ ಭೇಟಿಯಾಗಿದ್ದರೂ ಜಿಲ್ಲಾಧಿಕಾರಿ ಶುಭಕಲ್ಯಾಣ್, ಸಿಇಓ ಪ್ರಭು ಅವರು ಸ್ಥಳದಲ್ಲಿ ಹಾಜರಿರಲಿಲ್ಲ. ಬದಲಾಗಿ ಸೋಮಣ್ಣ ಸ್ವಾಗತಕ್ಕೆ ಸಹಾಯಕ ಆಯುಕ್ತರನ್ನು ಕಳುಹಿಸಿದ್ದರು. ಅವರಿಬ್ಬರೂ ಜಿಲಾಸ್ತುವಾರಿ ಸಚಿವ ಜಿ.ಪರಮೇಶ್ವರ್ ಪ್ರವಾಸದ ಕಾರ್ಯಕ್ರಮಗಳಿಗೆ ಹಾಜರಾಗಲು ಹೋಗಿದ್ದರು. ಅವರಿಬ್ಬರ ನಡೆಯಿಂದ ಕೆಂಡಾಮಂಡಲರಾದ ಸೋಮಣ್ಣ ಫೋನ್ ಮೂಲಕವೇ ತರಾಟೆಗೆ ತೆಗೆದುಕೊಂಡಿದ್ದಾರೆ. ವಿವಾದ ಮಾಡಿಕೊಳ್ಳಲು ಹೋಗಬೇಡಿ. ಸ್ಥಳದಲ್ಲಿ ಹಾಜರಿದ್ದು ಜನರ ಸಮಸ್ಯೆಗೆ ಕಿವಿಯಾಗಬೇಕು. ಇಲ್ಲದಿದ್ದರೆ ಜನವೇ ಪಾಠ ಕಲಿಸುತ್ತಾರೆ ಎಂದು ಎಚ್ಚರಿಕೆ ನೀಡಿದರು.

ಕಲುಷಿತ ನೀರು ಸೇವನೆಯಿಂದ ವಾಂತಿ- ಭೇದಿ ಉಂಟಾಗಿ ಆಸ್ಪತ್ರೆಗೆ ದಾಖಲಾಗಿ ಮಧುಗಿರಿ ತಾಲೂಕಿನ ಸಂತ್ರಸ್ತರನ್ನು ಭೇಟಿಯಾದ ಸೋಮಣ್ಣ ಅವರು ಸಾಂತ್ವನ ಹೇಳಿದರು. ಈ ವೇಳೆಯೂ ಈ ವೇಳೆ ಸ್ಥಳದಲ್ಲಿ ಜಿಲ್ಲಾಧಿಕಾರಿ ಇಲ್ಲದಿರುವ ಬಗ್ಗೆ ಬೇಸರ ವ್ಯಕ್ತಪಡಿಸಿದರು. ಡಿಸಿ ಶುಭಕಲ್ಯಾಣ್, ಸಿಇಓ ಪ್ರಭುಗೆ ಪೋನ್ ಮಾಡಿ ವಿಚಾರಿಸಿದರು. ಪರಿಹಾರ ಹೇಳಲು ಇಲ್ಲಿ ಯಾರೂ ಇಲ್ಲ. ಜಿಲ್ಲಾ ಆರೋಗ್ಯ ಅಧಿಕಾರಿಗೂ ಕುಡಿಯುವ ನೀರಿನ ಸಮಸ್ಯೆಗೆ ಏನು ಸಂಬಂಧ. ನೀರು ಕೊಡೋರು ಯಾರು ಎಂದು ಪ್ರಶ್ನಿಸಿದರು.

ಜಿಲ್ಲಾಸ್ಪತ್ರೆಗೆ ನಾನು ಬಂದರೆ ಕೇಳುವುದಕ್ಕೆ ಗತಿಯಿಲ್ಲ. ನನಗೂ ನನ್ನದೇ ಆದಂತಹ ಜವಬ್ದಾರಿಯಿದೆ. ಇಲ್ಲಿ ಒಬ್ಬ ಅಧಿಕಾರಿಯೂ ಇಲ್ಲ. ಸ್ಥಳದಲ್ಲಿ ನೀವು ಇರಬೇಕಿತ್ತು. ಎಲ್ಲೆಲ್ಲಿಗೂ ಹೋಗಿ ನನಗೆ ಟೋಪಿ ಹಾಕಬೇಡಿ. ನಾನು ಎಂಪಿಯಾಗಿ ಆಸ್ಪತ್ರೆಗೆ ಬಂದಿದ್ದೇನೆ. ನಿಮ್ಮ ಯಾವ ಅಧಿಕಾರಿಯೂ ಇಲ್ಲ ಇಲ್ಲ. ಒಬ್ಬ ವೈದ್ಯರು ಇಲ್ಲ. ಜನರಿಗೆ ಮೋಸ ಮಾಡಿದರೆ ಅವರೂ ಪಾಠ ಕಲಿಸುತ್ತಾರೆ ಎಂದು ತರಾಟೆಗೆ ತೆಗೆದುಕೊಂಡರು.

ಸಂತ್ರಸ್ತರಿಗೆ ಸಾಂತ್ವನ

ಕಲುಷಿತ ನೀರು ಕುಡಿದು ಚನ್ನೆನಹಳ್ಳಿ ಗ್ರಾಮದ ಜನರಿಗೆ ಸಚಿವ ಸೋಮಣ್ಣ ಆಸ್ಪತ್ರೆಯಲ್ಲಿ ಸಾಂತ್ವನ ಹೇಳಿದರು. ತುಮಕೂರು ಜಿಲ್ಲಾಸ್ಪತ್ರೆಗೆ ಭೇಟಿ ನೀಡಿ ಚಿಕಿತ್ಸೆ ಪಡೆಯುತ್ತಿರುವ ಅಸ್ವಸ್ಥರಿಗೆ ಸಾಂತ್ವನ ಹೇಳಿದರು. ವಿ.ಸೋಮಣ್ಣಗೆ ಜಿಲ್ಲಾ ಆರೋಗ್ಯಧಿಕಾರಿ ಓ ಡಾ ಮಂಜುನಾಥ್, ಶಾಸಕ ಜಿ.ಬಿ ಜ್ಯೋತಿ ಗಣೇಶ್, ಸುರೇಶ್ ಗೌಡ ಸಾಥ್ ಕೊಟ್ಟರು.

ಸಿದ್ದಗಂಗಾ ಮಠಕ್ಕೆ ಭೇಟಿ: ತುಮಕೂರಿಗೆ ಆಗಮಿಸಿದ್ದ ಸೋಮಣ್ಣ ಸಿದ್ಧಗಂಗಾ ಮಠಕ್ಕೆ ಭೇಟಿ ನೀಡಿದರು. ಬಳಿಕ ಮಾತನಾಡಿದ ಅವರು, ನರೇಂದ್ರ ಮೋದಿ ಅವರು ನನ್ನನ್ನ ಎನ್ ಡಿಎ ಸರ್ಕಾರದ ಸಚಿವನನ್ನಾಗಿ ಮಾಡಿದ್ದಾರೆ, ಇದಕ್ಕಾಗಿ ಪ್ರಧಾನಿ ಹಾಗೂ ಗೃಹ ಸಚಿವರಿಗೆ ಧನ್ಯವಾದಗಳು. ಜೊತೆಗೆ ಮಾಜಿ ಪ್ರಧಾನಿ ದೇವೇಗೌಡರಿಗೆ ಧನ್ಯವಾದ ಹೇಳುತ್ತೇನೆ. ಇಂದು ತುಮಕೂರು ಜಿಲ್ಲೆಯ ಸ್ವಾಮಿಜಿಗಳನ್ನು ಭೇಟಿ ಮಾಡಿ ಆಶೀರ್ವಾದ ಪಡೆಯುತ್ತೇವೆ ಎಂದು ಹೇಳಿದರು.

ಮಧುಗಿರಿಯಲ್ಲಿ ಕಲುಷಿತ ನೀರು ಕುಡಿದು ಸಾವನಪ್ಪಿದ್ದಾರೆ. ಇದು ನಡೆಯಬಾರದಿತ್ತು. ಈ ಕುರಿತು ಜಿಲ್ಲಾ ಉಸ್ತುವಾರಿ ಸಚಿವರ ಜೊತೆ ಮಾತನಾಡಿದ್ದೇನೆ. ಜಿಲ್ಲಾಧಿಕಾರಿಯಿಂದ ವರದಿ ಪಡೆಯುತ್ತೇನೆ. ನಾನೂ ಜಿಲ್ಲಾಸ್ಪತ್ರೆಗೆ ಭೇಟಿ ಕೊಟ್ಟು ಆರೋಗ್ಯ ವಿಚಾರಿಸುವುದಾಗಿ ಹೇಳಿದರು.

ಇದನ್ನೂ ಓದಿ: CM Award : ಕಳಂಕಿತ ಡಿವೈಎಸ್ಪಿಜಾವೀದ್​ಗೆ ಸಿಎಂ ಪದಕ ನೀಡುವಂತೆ ಶಿಫಾರಸು; ಶಾಸಕ ಕಂದಕೂರ ವಿರೋಧ

ನನಗೆ ಕೊಟ್ಟ ಖಾತೆಯನ್ನು ಪ್ರಾಮಾಣಿಕವಾಗಿ ನಿಭಾಯಿಸುತ್ತೇನೆ. ಪ್ರಧಾನಿ ಮೋದಿ ಅವರ ನಿರೀಕ್ಷೆಯಂತೆ ಕೆಲಸ ಮಾಡುತ್ತೇನೆ. ಎನ್ ಡಿಎ ಒಕ್ಕೂಟದಿಂದ ರಾಷ್ಟ್ರದ ಎರಡು ಉಪಯುಕ್ತವಾದ ಜವಾಬ್ದಾರಿಗಳನ್ನು ನನಗೆ ನೀಡಿದ್ದಾರೆ. ಇಲಾಖೆಯನ್ನು ಅರ್ಥಮಾಡ್ಕೊಂಡು ನನ್ನ 45 ವರ್ಷದ ರಾಜಕೀಯ ಅನುಭವ ಬಳಸಿಕೊಂಡು ಕೆಲಸ ಮಾಡುವೆ ಎಂದು ಹೇಳಿದರು.

ಭಾನುವಾರ ಕಾರ್ಯಕರ್ತರ ಸಭೆ ಕರೆದಿದ್ದೇನೆ. ಎರಡು ಪಕ್ಷದ ಜಿಲ್ಲಾಧ್ಯಕ್ಷರು, ಪದಾಧಿಕಾರಿಗಳು, ಪ್ರಧಾನ ಕಾರ್ಯದರ್ಶಿಗಳ ಸಭೆ ಕರೆಯಲಾಗಿದೆ ಎಂದು ನುಡಿದರು.

Continue Reading

ಉತ್ತರ ಕನ್ನಡ

Self Harming : ಪಿಎಸ್‌ಐ ಕಿರುಕುಳ; ಕುಡಿದ ಅಮಲಿನಲ್ಲಿ ಠಾಣೆ ಎದುರೇ ಪೆಟ್ರೋಲ್‌ ಸುರಿದು ಬೆಂಕಿ ಹಚ್ಚಿಕೊಂಡ

Self Harming : ಕುಡಿದ ಅಮಲಿನಲ್ಲಿ ಠಾಣೆಗೆ ಬಂದ ವ್ಯಕ್ತಿಯೊಬ್ಬ ಪಿಎಸ್‌ಐ ನನಗೆ ಮಾನಸಿಕ ಕಿರುಕುಳ ನೀಡುತ್ತಿದ್ದಾರೆ ಎಂದು ಆರೋಪಿಸಿ, ಠಾಣೆ ಎದುರೇ ಪೆಟ್ರೋಲ್‌ ಸುರಿದುಕೊಂಡು ಆತ್ಮಹತ್ಯೆಗೆ ಯತ್ನಿಸಿದ್ದಾನೆ.

VISTARANEWS.COM


on

By

Self Harming
ಸಾಂದರ್ಭಿಕ ಚಿತ್ರ
Koo

ಕಾರವಾರ: ಪಿಎಸ್ಐ ಮಾನಸಿಕ ಕಿರುಕುಳ (Self Harming) ನೀಡುತ್ತಿದ್ದಾರೆ ಎಂದು ಆರೋಪಿಸಿ ವ್ಯಕ್ತಿಯೊಬ್ಬ ಠಾಣೆ ಎದುರೇ ಪೆಟ್ರೋಲ್ ಸುರಿದುಕೊಂಡು ಆತ್ಮಹತ್ಯೆಗೆ ಯತ್ನಿಸಿದ್ದಾರೆ. ಉತ್ತರಕನ್ನಡ ಜಿಲ್ಲೆಯ ಜೋಯಿಡಾದ ರಾಮನಗರ ಪೊಲೀಸ್ ಠಾಣೆ ಬಳಿ ಘಟನೆ ನಡೆದಿದೆ.

ರಾಮನಗರ ಹನುಮಾನ್ ಗಲ್ಲಿಯ ನಿವಾಸಿ ಭಾಸ್ಕರ್ ಬೋಂಡೆಲ್ಕರ್ ಆತ್ಮಹತ್ಯೆಗೆ ಯತ್ನಿಸಿದವರು. ಜೂಜಾಟ ಆರೋಪದಡಿ ಭಾಸ್ಕರ್‌ ವಿರುದ್ಧ ರಾಮನಗರ ಪಿಎಸ್ಐ ಬಸವರಾಜ್ ಮಗನೂರು ಪ್ರಕರಣ ದಾಖಲಿಸಿದ್ದರು. ನಿನ್ನೆ ಗುರುವಾರ ಜಮೀನು ವಿಚಾರಕ್ಕೆ ಭಾಸ್ಕರ್‌ ಮದ್ಯ ಸೇವಿಸಿ ಬೈಕ್‌ ಮೂಲಕ ಠಾಣೆಗೆ ತೆರಳಿದ್ದಾನೆ.

ಮದ್ಯ ಸೇವಿಸಿದ್ದರಿಂದ ಬೈಕ್ ಠಾಣೆಯಲ್ಲಿ ಬಿಟ್ಟು ಹೋಗುವಂತೆ ಪಿಎಸ್ಐ ಬಸವರಾಜ್‌ ಸೂಚಿಸಿದ್ದಾರೆ. ಇಷ್ಟಕ್ಕೆ ಮಾನಸಿಕ ಕಿರುಕುಳ ನೀಡುತ್ತಿದ್ದಾರೆ ಎಂದು ಮದ್ಯದ ಅಮಲಿನಲ್ಲಿ ಭಾಸ್ಕರ್‌ ಪೆಟ್ರೋಲ್ ಸುರಿದುಕೊಂಡು ಆತ್ಮಹತ್ಯೆಗೆ ಯತ್ನಿಸಿದ್ದಾನೆ. ಸದ್ಯ ಗಂಭೀರವಾಗಿ ಗಾಯಗೊಂಡ ಭಾಸ್ಕರ್‌ನನ್ನು ಬೆಳಗಾವಿ ಆಸ್ಪತ್ರೆಗೆ ರವಾನೆ ಮಾಡಲಾಗಿದೆ. ರಾಮನಗರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಪ್ರಕರಣ ನಡೆದಿದೆ.

ಇದನ್ನೂ ಓದಿ: Udupi News : ತಂದೆ ಸಾವಿನಿಂದ ಖಿನ್ನತೆಗೆ ಜಾರಿದವಳು ಬಾವಿಗೆ ಹಾರಿ ಆತ್ಮಹತ್ಯೆ; ಮಕ್ಕಳಿಬ್ಬರು ಅನಾಥ

ಸಾಲದ ಶೂಲಕ್ಕೆ ಮನನೊಂದ ರೈತ; ಕೆರೆಗೆ ಹಾರಿ ಆತ್ಮಹತ್ಯೆ

ಮೈಸೂರು: ಬೆಳೆ ಸಾಲ ತೀರಿಸಲಾಗದೆ ಕೆರೆಗೆ ಹಾರಿ ರೈತರೊಬ್ಬರು (Farmer Death) ಆತ್ಮಹತ್ಯೆ (Self Harming) ಮಾಡಿಕೊಂಡು ಮೃತಪಟ್ಟಿದ್ದಾರೆ. ಮೈಸೂರು (Mysuru News) ಜಿಲ್ಲೆಯ ಹುಣಸೂರು ತಾಲೂಕಿನ ಮನುಗನಹಳ್ಳಿಯಲ್ಲಿ ಘಟನೆ ನಡೆದಿದೆ. ಅಣ್ಣೇಗೌಡ (57) ಮೃತ ದುರ್ದೈವಿ.

ಅಣ್ಣೇಗೌಡ ಮೂರು ಎಕರೆಯಲ್ಲಿ ತಂಬಾಕು ಮತ್ತಿತರೆ ಬೆಳೆ ಬೆಳೆಯುತ್ತಿದ್ದರು. ಕೃಷಿ ಚಟುವಟಿಕೆಗಾಗಿ ಪಂಚವಳ್ಳಿಯ ಐಒಬಿ ಬ್ಯಾಂಕ್‌ನಲ್ಲಿ 10 ಲಕ್ಷ ರೂ. ಸಾಲ ಪಡೆದಿದ್ದರು. ಖಾಸಗಿ ಬ್ಯಾಂಕ್‌ನಲ್ಲಿ 14 ಲಕ್ಷ ರೂ. ಹಾಗೂ 5 ಲಕ್ಷ ರೂ. ಕೈ ಸಾಲ ಮಾಡಿಕೊಂಡಿದ್ದರು. ಬೆಳೆ ಕೈ ಹತ್ತದ ಕಾರಣ ಸಾಲ ತೀರಿಸಲಾಗದೆ ಆತ್ಮಹತ್ಯೆ ಮಾಡಿಕೊಂಡಿದ್ದಾರೆ.

ಕೆರೆಯಿಂದ ರೈತನ ಮೃತದೇಹವನ್ನು ಮೇಲಕ್ಕೆತ್ತಿದ್ದು, ಮರಣೋತ್ತರ ಪರೀಕ್ಷೆಗೆ ರವಾನಿಸಲಾಗಿದೆ. ಹುಣಸೂರು ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ಈ ಸಂಬಂಧ ಪ್ರಕರಣ ದಾಖಲಾಗಿದೆ.

ಈ ಸಂಗತಿಯ ಕುರಿತು ನಿಮ್ಮ ಅನಿಸಿಕೆ ಏನು? ಕಾಮೆಂಟ್ ಮೂಲಕ ತಿಳಿಸಿ

Continue Reading

ಮೈಸೂರು

Farmer Death : ಸಾಲದ ಶೂಲಕ್ಕೆ ಮನನೊಂದ ರೈತ; ಕೆರೆಗೆ ಹಾರಿ ಆತ್ಮಹತ್ಯೆ

Farmer Death : ಸಾಲದ ಶೂಲಕ್ಕೆ ಸಿಲುಕಿ ಮನನೊಂದ ರೈತರೊಬ್ಬರು ಕೆರೆಗೆ ಹಾರಿ ಆತ್ಮಹತ್ಯೆ (Self Harming) ಮಾಡಿಕೊಂಡಿದ್ದಾರೆ. ಸ್ಥಳಕ್ಕೆ ಪೊಲೀಸರು ದೌಡಾಯಿಸಿದ್ದು, ಕೆರೆಯಿಂದ ಮೃತದೇಹವನ್ನು ತೆರವು ಮಾಡಿದ್ದಾರೆ.

VISTARANEWS.COM


on

By

Farmer Death
Koo

ಮೈಸೂರು: ಬೆಳೆ ಸಾಲ ತೀರಿಸಲಾಗದೆ ಕೆರೆಗೆ ಹಾರಿ ರೈತರೊಬ್ಬರು (Farmer Death) ಆತ್ಮಹತ್ಯೆ (Self Harming) ಮಾಡಿಕೊಂಡು ಮೃತಪಟ್ಟಿದ್ದಾರೆ. ಮೈಸೂರು (Mysuru News) ಜಿಲ್ಲೆಯ ಹುಣಸೂರು ತಾಲೂಕಿನ ಮನುಗನಹಳ್ಳಿಯಲ್ಲಿ ಘಟನೆ ನಡೆದಿದೆ. ಅಣ್ಣೇಗೌಡ (57) ಮೃತ ದುರ್ದೈವಿ.

ಅಣ್ಣೇಗೌಡ ಮೂರು ಎಕರೆಯಲ್ಲಿ ತಂಬಾಕು ಮತ್ತಿತರೆ ಬೆಳೆ ಬೆಳೆಯುತ್ತಿದ್ದರು. ಕೃಷಿ ಚಟುವಟಿಕೆಗಾಗಿ ಪಂಚವಳ್ಳಿಯ ಐಒಬಿ ಬ್ಯಾಂಕ್‌ನಲ್ಲಿ 10 ಲಕ್ಷ ರೂ. ಸಾಲ ಪಡೆದಿದ್ದರು. ಖಾಸಗಿ ಬ್ಯಾಂಕ್‌ನಲ್ಲಿ 14 ಲಕ್ಷ ರೂ. ಹಾಗೂ 5 ಲಕ್ಷ ರೂ. ಕೈ ಸಾಲ ಮಾಡಿಕೊಂಡಿದ್ದರು. ಬೆಳೆ ಕೈ ಹತ್ತದ ಕಾರಣ ಸಾಲ ತೀರಿಸಲಾಗದೆ ಆತ್ಮಹತ್ಯೆ ಮಾಡಿಕೊಂಡಿದ್ದಾರೆ.

ಕೆರೆಯಿಂದ ರೈತನ ಮೃತದೇಹವನ್ನು ಮೇಲಕ್ಕೆತ್ತಿದ್ದು, ಮರಣೋತ್ತರ ಪರೀಕ್ಷೆಗೆ ರವಾನಿಸಲಾಗಿದೆ. ಹುಣಸೂರು ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ಈ ಸಂಬಂಧ ಪ್ರಕರಣ ದಾಖಲಾಗಿದೆ.

ಇದನ್ನೂ ಓದಿ: Self Harming : ಒಂದೇ ದಿನ ನಾಲ್ವರು ಗೃಹಿಣಿಯರ ಆತ್ಮಹತ್ಯೆ; ಅವರಲ್ಲಿಬ್ಬರು ಯೋಧರ ಪತ್ನಿಯರು

6 ತಿಂಗಳ ಹಿಂದಷ್ಟೇ ಮದುವೆ ಆಗಿದ್ದ ನವ ವಿವಾಹಿತೆ ಶವವಾಗಿ ಪತ್ತೆ; ಕೊಂದವರು ಯಾರು?

ಮೈಸೂರು: ಮದುವೆಯಾದ ಆರೇ ತಿಂಗಳಿಗೆ ನವವಿವಾಹಿತೆ ನೇಣು ಬಿಗಿದ ಸ್ಥಿತಿಯಲ್ಲಿ (Self Harming) ಪತ್ತೆಯಾಗಿದ್ದಾಳೆ. ಮೈಸೂರಿನ ಮಾನಸಿ ನಗರ ಬಿಎಸ್ಎನ್ಎಲ್ ಲೇಔಟ್‌ನಲ್ಲಿ ಘಟನೆ ನಡೆದಿದೆ. ಸೌಮ್ಯಾಶ್ರೀ (27) ಮೃತ ದುರ್ದೈವಿ.

ಆರು ತಿಂಗಳ ಹಿಂದೆ ಮೈಸೂರಿನ ಮಂಜುನಾಥ್ ಎಂಬುವರ ಜತೆ ಸೌಮ್ಯಾಶ್ರೀ ಮದುವೆಯಾಗಿದ್ದರು. ಸೌಮ್ಯಾಶ್ರೀ ತಂದೆ ಶ್ರೀಧರ್ ಬೆಂಗಳೂರಿನಿಂದ ಮೈಸೂರಿಗೆ ಮಗಳನ್ನು ಮದುವೆ ಮಾಡಿಕೊಟ್ಟಿದ್ದರು. ಆದರೆ ಮದುವೆ ಆದ ಕೆಲವೇ ದಿನಗಳಲ್ಲಿ ಸೌಮ್ಯಾಳ ನಡತೆ ಮೇಲೆ ಪತಿ ಮಂಜುನಾಥ್ ಅನುಮಾನ ಪಡುತ್ತಿದ್ದ ಎನ್ನಲಾಗಿದೆ.

ಈ ಕುರಿತು ಸೌಮ್ಯಾ ಹೆತ್ತವರಿಗೆ ಮಾಹಿತಿ ನೀಡಿದ್ದಳು. ಹೀಗಾಗಿ ಮಂಜುನಾಥ್ ಹಾಗೂ ಅವರ ಮನೆಯವರೆಲ್ಲ ಸೇರಿ ಸೌಮ್ಯಾಳನ್ನ ಕೊಲೆ ಮಾಡಿದ್ದಾರೆ ಎಂದು ಪೋಷಕರು ಆರೋಪಿಸಿದ್ದಾರೆ. ಮಗಳ ಶವ ಕಂಡು ಮೃತ ಕುಟುಂಬಸ್ಥರ ಆಕ್ರಂದನ ಮುಗಿಲು ಮುಟ್ಟಿದೆ.

Self Harming
ಸೌಮ್ಯಳ ಶವ ಕಂಡು ಪೋಷಕರ ಆಕ್ರಂದನ

ಸ್ಥಳಕ್ಕೆ ಮೈಸೂರಿನ ಗ್ರಾಮಾಂತರ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಮೃತದೇಹವನ್ನು ಮರಣೋತ್ತರ ಪರೀಕ್ಷೆಗೆ ರವಾನಿಸಿದ್ದಾರೆ. ಮೈಸೂರು ಗ್ರಾಮಾಂತರ ಪೊಲೀಸ್‌ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ತನಿಖೆಯನ್ನು ಕೈಗೊಂಡಿದ್ದಾರೆ.

ಈ ಸಂಗತಿಯ ಕುರಿತು ನಿಮ್ಮ ಅನಿಸಿಕೆ ಏನು? ಕಾಮೆಂಟ್ ಮೂಲಕ ತಿಳಿಸಿ

Continue Reading

ಕ್ರೈಂ

Self Harming : ಒಂದೇ ದಿನ ನಾಲ್ವರು ಗೃಹಿಣಿಯರ ಆತ್ಮಹತ್ಯೆ; ಅವರಲ್ಲಿಬ್ಬರು ಯೋಧರ ಪತ್ನಿಯರು

Self Harming : ಒಂದೇ ದಿನ ನಾಲ್ವರು ಗೃಹಿಣಿಯರು ಆತ್ಮಹತ್ಯೆಗೆ ಶರಣಾಗಿದ್ದು, ಅವರಲ್ಲಿಬ್ಬರು ಯೋಧರ ಪತ್ನಿಯರಾಗಿದ್ದಾರೆ. ಒಬ್ಬರಿಗೆ ಅತ್ತೆ ಕಾಟವಾದರೆ ಮತ್ತೊಬ್ಬರಿಗೆ ಕೌಟುಂಬಿಕ ಕಲಹಕ್ಕೆ ಆತ್ಮಹತ್ಯೆ ಮಾಡಿಕೊಂಡಿದ್ದಾರೆ.

VISTARANEWS.COM


on

By

Self Harming
Koo

ಕೊಪ್ಪಳ/ ಚಿಕ್ಕೋಡಿ: ಕೊಪ್ಪಳದ ಕುಕನೂರು ತಾಲೂಕಿನ ಇಟಗಿ ಗ್ರಾಮದಲ್ಲಿ ನೇಣು ಬಿಗಿದುಕೊಂಡು ಗೃಹಿಣಿಯೊಬ್ಬರು ಆತ್ಮಹತ್ಯೆಗೆ (Self Harming) ಶರಣಾಗಿದ್ದಾರೆ. ವೀಣಾ ಬಸಯ್ಯ ಸಸಿ (25) ಆತ್ಮಹತ್ಯೆಗೆ ಶರಣಾದವರು.

ಒಂದೂವರೆ ತಿಂಗಳ ಹಿಂದೆ ಮದುವೆಯಾಗಿದ್ದ ವೀಣಾ ಗುರುವಾರ ಮಧ್ಯಾಹ್ನ ನೇಣು ಬಿಗಿದುಕೊಂಡು ಮೃತಪಟ್ಟಿದ್ದಾರೆ. ವೀಣಾ ಪತಿ ರಾಜಸ್ಥಾನದಲ್ಲಿದ್ದು, ಅಲ್ಲಿ ಸೈನಿಕನಾಗಿ ಸೇವೆ ಸಲ್ಲಿಸುತ್ತಿದ್ದಾರೆ. ಸದ್ಯ ಈ ಸಂಬಂಧ ಯಾವುದೇ ಪ್ರಕರಣ ದಾಖಲಾಗಿಲ್ಲ ಎಂದು ತಿಳಿದು ಬಂದಿದೆ. ಜತೆಗೆ ಆತ್ಮಹತ್ಯೆಗೆ ನಿಖರ ಕಾರಣವೇನು ಎಂಬುದು ತಿಳಿದುಬಂದಿಲ್ಲ.

ಅತ್ತೆ ಕಾಟಕ್ಕೆ ಬೇಸತ್ತು ನೇಣಿಗೆ ಶರಣಾದಳು

ಅತ್ತೆಯ ಕಾಟದಿಂದ ಬೇಸತ್ತ ಯೋಧನ ಪತ್ನಿ ಆತ್ಮಹತ್ಯೆಗೆ ಶರಣಾಗಿದ್ದಾಳೆ. ಬೆಳಗಾವಿ ಜಿಲ್ಲೆಯ ಕಾಗವಾಡ ತಾಲೂಕಿನ ಮೋಳೆ ಗ್ರಾಮದಲ್ಲಿ ಘಟನೆ ನಡೆದಿದೆ. ರೂಪಾಬಾಯಿ ಬಾಳು ರೂಪನವರ (31) ಆತ್ಮಹತ್ಯೆ ಮಾಡಿಕೊಂಡವರು.

ಪತಿ ಬಾಳು ರೂಪನವರ ಅರುಣಾಚಲಪ್ರದೇಶ ಗ್ಯಾಂಟುಕನಲ್ಲಿ ಕಾರ್ಯ ನಿರ್ವಹಿಸುತ್ತಿದ್ದಾರೆ. ಅತ್ತೆ ಸೇವಂತಾ ಸಿದರಾಯ ರೂಪಾಬಾಯಿಗೆ ಕಿರುಕುಳ ನೀಡುತ್ತಿದ್ದರು ಎನ್ನಲಾಗಿದೆ.ಇದರಿಂದ ಮನನೊಂದು ನೇಣಿಗೆ ಶರಣಾಗಿದ್ದಾರೆ. ರೂಪಾಬಾಯಿಗೆ ಎರಡು ಮಕ್ಕಳಿದ್ದು, ಅನಾಥರಾಗಿವೆ.

ಸ್ಥಳಕ್ಕೆ ಕಾಗವಾಡ ಪೊಲೀಸರು ಭೇಟಿ ನೀಡಿ ಪರಶೀಲನೆ ನಡೆಸಿದ್ದು, ಮೃತದೇಹವನ್ನು ಮರಣೋತ್ತರ ಪರೀಕ್ಷೆಗೆ ರವಾನಿಸಲಾಗಿದೆ. ಕಾಗವಾಡ ಪೊಲೀಸ್‌ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ತನಿಖೆಯನ್ನು ನಡೆಸಲಾಗುತ್ತಿದೆ.

ಇದನ್ನೂ ಓದಿ: Actor Darshan: ಚಿನ್ನುಮರಿ ತಂಟೆಗೆ ಹೋದ್ರೆ ಒದೆ, ಪವಿತ್ರಾ ಗೌಡ ತಂಟೆಗೆ ಬಂದ್ರೆ ಕೊಲೆ; ಟ್ರೋಲ್ ಆಗುತ್ತಿದೆ ​ದರ್ಶನ್​ ಕೊಲೆ ಕೇಸ್​​

ತಂದೆ ಸಾವಿನಿಂದ ಖಿನ್ನತೆಗೆ ಜಾರಿದವಳು ಬಾವಿಗೆ ಹಾರಿದಳು

ಉಡುಪಿ: ಬಾವಿಗೆ ಹಾರಿ ಮಹಿಳೆಯೊಬ್ಬರು ಆತ್ಮಹತ್ಯೆ (Self Harming) ಮಾಡಿಕೊಂಡಿದ್ದಾರೆ. ಉಡುಪಿಯ (Udupi News) ಕಾಪು ತಾಲೂಕಿನ ಮಲ್ಲಾರು ಎಂಬಲ್ಲಿ ಘಟನೆ ನಡೆದಿದೆ. ಮಲ್ಲಾರು ಚುಕ್ಕು ತೋಟ ನಿವಾಸಿ ಮೋಸಿನಾ (34) ಆತ್ಮಹತ್ಯೆ ಮಾಡಿಕೊಂಡವರು.

ಮೋಸಿನಾ ತಂದೆಯ ನಿಧನದ ನಂತರ ಖಿನ್ನತೆಗೊಳಗಾಗಿದ್ದರು. ಮೋಸಿನಾಗೆ 7 ವರ್ಷ ಮತ್ತು ಒಂದೂವರೆ ವರ್ಷದ ಇಬ್ಬರು ಮಕ್ಕಳಿದ್ದರು. ತಂದೆಯ ಕೊರಗಿನಲ್ಲೇ ಖಿನ್ನತೆಗೆ ಒಳಗಾದ ಮೋಸಿನಾ ಮನೆ ಬಳಿ ಇದ್ದ ಬಾವಿ ಹಾರಿ ಮೃತಪಟ್ಟಿದ್ದಾರೆ. ಸ್ಥಳೀಯರು ಇದನ್ನೂ ಗಮನಿಸಿ ಪೊಲೀಸರಿಗೆ ಮಾಹಿತಿ ನೀಡಿದ್ದಾರೆ.

Udupi News Self Harming

ಉಡುಪಿ ಜಿಲ್ಲಾ ಅಗ್ನಿಶಾಮಕ ಮತ್ತು ತುರ್ತು ಸೇವೆಗಳ ಸಿಬ್ಬಂದಿ ಕಾರ್ಯಾಚರಣೆ ನಡೆಸಿ, ಸ್ಥಳೀಯರ ಸಹಾಯದಿಂದ ಮಹಿಳೆಯ ಮೃತದೇಹ ಬಾವಿಯಿಂದ ತೆರವು ಮಾಡಿದ್ದಾರೆ. ಮೃತದೇಹವನ್ನು ಮರಣೋತ್ತರ ಪರೀಕ್ಷೆಗೆ ರವಾನಿಸಿದ್ದಾರೆ. ಕಾಪು ಪೊಲೀಸರು ಈ ಸಂಬಂಧ ಪ್ರಕರಣ ದಾಖಲಾಗಿದೆ.

6 ತಿಂಗಳ ಹಿಂದಷ್ಟೇ ಮದುವೆ ಆಗಿದ್ದ ನವ ವಿವಾಹಿತೆ ಶವವಾಗಿ ಪತ್ತೆ

ಮೈಸೂರು: ಮದುವೆಯಾದ ಆರೇ ತಿಂಗಳಿಗೆ ನವವಿವಾಹಿತೆ ನೇಣು ಬಿಗಿದ ಸ್ಥಿತಿಯಲ್ಲಿ (Self Harming) ಪತ್ತೆಯಾಗಿದ್ದಾಳೆ. ಮೈಸೂರಿನ ಮಾನಸಿ ನಗರ ಬಿಎಸ್ಎನ್ಎಲ್ ಲೇಔಟ್‌ನಲ್ಲಿ ಘಟನೆ ನಡೆದಿದೆ. ಸೌಮ್ಯಾಶ್ರೀ (27) ಮೃತ ದುರ್ದೈವಿ.

ಆರು ತಿಂಗಳ ಹಿಂದೆ ಮೈಸೂರಿನ ಮಂಜುನಾಥ್ ಎಂಬುವರ ಜತೆ ಸೌಮ್ಯಾಶ್ರೀ ಮದುವೆಯಾಗಿದ್ದರು. ಸೌಮ್ಯಾಶ್ರೀ ತಂದೆ ಶ್ರೀಧರ್ ಬೆಂಗಳೂರಿನಿಂದ ಮೈಸೂರಿಗೆ ಮಗಳನ್ನು ಮದುವೆ ಮಾಡಿಕೊಟ್ಟಿದ್ದರು. ಆದರೆ ಮದುವೆ ಆದ ಕೆಲವೇ ದಿನಗಳಲ್ಲಿ ಸೌಮ್ಯಾಳ ನಡತೆ ಮೇಲೆ ಪತಿ ಮಂಜುನಾಥ್ ಅನುಮಾನ ಪಡುತ್ತಿದ್ದ ಎನ್ನಲಾಗಿದೆ.

ಈ ಕುರಿತು ಸೌಮ್ಯಾ ಹೆತ್ತವರಿಗೆ ಮಾಹಿತಿ ನೀಡಿದ್ದಳು. ಹೀಗಾಗಿ ಮಂಜುನಾಥ್ ಹಾಗೂ ಅವರ ಮನೆಯವರೆಲ್ಲ ಸೇರಿ ಸೌಮ್ಯಾಳನ್ನ ಕೊಲೆ ಮಾಡಿದ್ದಾರೆ ಎಂದು ಪೋಷಕರು ಆರೋಪಿಸಿದ್ದಾರೆ. ಮಗಳ ಶವ ಕಂಡು ಮೃತ ಕುಟುಂಬಸ್ಥರ ಆಕ್ರಂದನ ಮುಗಿಲು ಮುಟ್ಟಿದೆ.

Self Harming
ಸೌಮ್ಯಳ ಶವ ಕಂಡು ಪೋಷಕರ ಆಕ್ರಂದನ

ಸ್ಥಳಕ್ಕೆ ಮೈಸೂರಿನ ಗ್ರಾಮಾಂತರ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಮೃತದೇಹವನ್ನು ಮರಣೋತ್ತರ ಪರೀಕ್ಷೆಗೆ ರವಾನಿಸಿದ್ದಾರೆ. ಮೈಸೂರು ಗ್ರಾಮಾಂತರ ಪೊಲೀಸ್‌ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ತನಿಖೆಯನ್ನು ಕೈಗೊಂಡಿದ್ದಾರೆ.

ಈ ಸಂಗತಿಯ ಕುರಿತು ನಿಮ್ಮ ಅನಿಸಿಕೆ ಏನು? ಕಾಮೆಂಟ್ ಮೂಲಕ ತಿಳಿಸಿ

Continue Reading
Advertisement
Actor Darshan Assistant Malli missing case
ಸ್ಯಾಂಡಲ್ ವುಡ್5 mins ago

Actor Darshan: ಹಲವು ವರ್ಷಗಳಿಂದ ದರ್ಶನ್ ಆಪ್ತ ʻಮಲ್ಲಿʼನಾಪತ್ತೆ; ರೇಣುಕಾ ಸ್ವಾಮಿಯ ಗತಿಯೇ ಆಯ್ತಾ?

V Somanna
ಪ್ರಮುಖ ಸುದ್ದಿ16 mins ago

V Somanna : ತಮ್ಮನ್ನು ಕಡೆಗಣಿಸಿದ ಜಿಲ್ಲಾಧಿಕಾರಿ, ಸಿಇಒಗೆ ಕೇಂದ್ರ ಸಚಿವ ಸೋಮಣ್ಣ ತರಾಟೆ

Self Harming
ಉತ್ತರ ಕನ್ನಡ19 mins ago

Self Harming : ಪಿಎಸ್‌ಐ ಕಿರುಕುಳ; ಕುಡಿದ ಅಮಲಿನಲ್ಲಿ ಠಾಣೆ ಎದುರೇ ಪೆಟ್ರೋಲ್‌ ಸುರಿದು ಬೆಂಕಿ ಹಚ್ಚಿಕೊಂಡ

Shakib Al Hasan
ಕ್ರೀಡೆ37 mins ago

Shakib Al Hasan: ನಿವೃತ್ತಿಯಾಗಿ ಎಂದು ಲೇವಡಿ ಮಾಡಿದ ಸೆಹವಾಗ್​ಗೆ ತಕ್ಕ ತಿರುಗೇಟು ನೀಡಿದ ಬಾಂಗ್ಲಾ ನಾಯಕ

Farmer Death
ಮೈಸೂರು46 mins ago

Farmer Death : ಸಾಲದ ಶೂಲಕ್ಕೆ ಮನನೊಂದ ರೈತ; ಕೆರೆಗೆ ಹಾರಿ ಆತ್ಮಹತ್ಯೆ

Gold Rate Today
ಚಿನ್ನದ ದರ47 mins ago

Gold Rate Today: ಆಭರಣ ಖರೀದಿಸಲು ಇದು ಸಕಾಲ; ಚಿನ್ನದ ಬೆಲೆ ಇಳಿಕೆ

Duniya Vijay wife Nagarathna Facebook Post After Court Order
ಸ್ಯಾಂಡಲ್ ವುಡ್1 hour ago

Duniya Vijay: ಗಂಡ ಕೈಬಿಟ್ರೂ, ನಂಬಿದ ದೇವರು ಕೈ ಬಿಡಲಿಲ್ಲ: ದುನಿಯಾ ವಿಜಯ್ ಪತ್ನಿ ನಾಗರತ್ನ

Actress Bbk 10 Siri Marriage Video Goes Viral
ಬಿಗ್ ಬಾಸ್1 hour ago

Actress Siri: ಸಿಂಪಲ್‌ ಆಗಿ ವೈವಾಹಿಕ ಜೀವನಕ್ಕೆ ಕಾಲಿಟ್ಟ `ಬಿಗ್‌ ಬಾಸ್‌ ಕನ್ನಡ 10′ ಸ್ಪರ್ಧಿ, ನಟಿ ಸಿರಿ!

Self Harming
ಕ್ರೈಂ1 hour ago

Self Harming : ಒಂದೇ ದಿನ ನಾಲ್ವರು ಗೃಹಿಣಿಯರ ಆತ್ಮಹತ್ಯೆ; ಅವರಲ್ಲಿಬ್ಬರು ಯೋಧರ ಪತ್ನಿಯರು

Euro Cup 2024
ಕ್ರೀಡೆ1 hour ago

Euro Cup 2024: ಇಂದಿನಿಂದ ಯುರೋ ಕಪ್ ಟೂರ್ನಿ; ಜರ್ಮನಿ-ಸ್ಕಾಟ್ಲೆಂಡ್ ನಡುವೆ ಮೊದಲ ಪಂದ್ಯ

Sharmitha Gowda in bikini
ಕಿರುತೆರೆ8 months ago

Geetha Serial Kannada: ನಿದ್ದೆ ಕದ್ದ ಚೋರಿ! ನಟಿ `ಭಾನುಮತಿ’ ಹಾಟ್‌ ಪೋಟೊಗಳಿಗೆ ಫ್ಯಾನ್ಸ್ ಫುಲ್ ಫಿದಾ

Kannada Serials
ಕಿರುತೆರೆ8 months ago

Kannada Serials TRP: 2ನೇ ಸ್ಥಾನದಲ್ಲಿ 2 ಧಾರಾವಾಹಿಗಳು; ಟಿಆರ್‌ಪಿ ರೇಸ್‌ನಲ್ಲಿಲ್ಲ ಭಾಗ್ಯಲಕ್ಷ್ಮೀ!

Bigg Boss- Saregamapa 20 average TRP
ಕಿರುತೆರೆ8 months ago

Kannada Serials TRP: ಏಳನೇ ಸ್ಥಾನಕ್ಕೆ ʻಅಮೃತಧಾರೆʼ ಕುಸಿತ; ಬಿಗ್‌ ಬಾಸ್‌-ಸರಿಗಮಪ ಟಿಆರ್‌ಪಿ ಎಷ್ಟು?

galipata neetu
ಕಿರುತೆರೆ7 months ago

Kanyadana Serial: ಕಿರುತೆರೆಗೆ ಮತ್ತೆ ಎಂಟ್ರಿ ಕೊಟ್ಟ ʻಗಾಳಿಪಟʼ ಖ್ಯಾತಿಯ ʻನೀತುʼ!

Kannada Serials
ಕಿರುತೆರೆ9 months ago

Kannada Serials TRP: ನಾಲ್ಕನೇ ಸ್ಥಾನಕ್ಕೆ ಕುಸಿತ ಕಂಡ ʻಸೀತಾ ರಾಮʼ; ಟಿಆರ್‌ಪಿ ರೇಸ್‌ಗೆ ʻಭಾಗ್ಯಲಕ್ಷ್ಮಿʼ ಬ್ಯಾಕ್‌!

Kannada Serials
ಕಿರುತೆರೆ8 months ago

Kannada Serials TRP: ಟಿಆರ್‌ಪಿಯಲ್ಲಿ ʻಭಾಗ್ಯಲಕ್ಷ್ಮೀʼ ಹವಾ; ʻಪುಟ್ಟಕ್ಕನ ಮಕ್ಕಳುʼ ಧಾರಾವಾಹಿಗೆ ಸಂಕಷ್ಟ!

Bigg Boss' dominates TRP; Sita Rama fell to the sixth position
ಕಿರುತೆರೆ8 months ago

Kannada Serials TRP: ಟಿಆರ್‌ಪಿಯಲ್ಲಿ ʻಬಿಗ್ ಬಾಸ್ʼದೇ ಮೇಲುಗೈ; 6ನೇ ಸ್ಥಾನಕ್ಕೆ ಕುಸಿದ ʻಸೀತಾ ರಾಮʼ

geetha serial Dhanush gowda engagement
ಕಿರುತೆರೆ6 months ago

Dhanush Gowda: ಗೀತಾ ಧಾರಾವಾಹಿ ನಟನ ನಿಶ್ಚಿತಾರ್ಥ; ಭವ್ಯಾಳ ಕಮೆಂಟ್‌ ಬಾಕ್ಸ್‌ ಆಫ್‌!

varun
ಕಿರುತೆರೆ7 months ago

Brindavana Serial: ʼಬೃಂದಾವನʼ ಧಾರಾವಾಹಿಯಲ್ಲಿ ದೊಡ್ಡ ಟ್ವಿಸ್ಟ್‌; ಪ್ರಮುಖ ಪಾತ್ರಧಾರಿಯೇ ಬದಲು

Kannada Serials
ಕಿರುತೆರೆ9 months ago

Kannada Serials TRP: ಟಿಆರ್‌ಪಿಯಲ್ಲಿ ಏರಿಕೆ ಕಂಡ ʻಅಮೃತಧಾರೆʼ; ʻಗಟ್ಟಿಮೇಳʼಕ್ಕೆ ನಾಲ್ಕನೇ ಸ್ಥಾನ!

karnataka weather Forecast
ಮಳೆ3 days ago

Karnataka Weather : ಭಾರಿ ಮಳೆಗೆ ಗುಡ್ಡದಿಂದ ಉರುಳಿ ಬಿದ್ದ ಬಂಡೆಗಲ್ಲು; ಬೆಂಗಳೂರಲ್ಲೂ ಸಂಜೆ ವರ್ಷಧಾರೆ

actor Darshan
ಚಿತ್ರದುರ್ಗ3 days ago

Actor Darshan: ರೇಣುಕಾ ಸ್ವಾಮಿ ಕೊಲೆ ಕೇಸ್‌ನಲ್ಲಿ ದರ್ಶನ್‌ ಅರೆಸ್ಟ್‌; ಪ್ರಕರಣವನ್ನು ಸಿಬಿಐಗೆ ವಹಿಸಲು ಒತ್ತಾಯ

Actor Darshan gets a series of questions from the police
ಸಿನಿಮಾ3 days ago

Actor Darshan : ಪವಿತ್ರಗೌಡ ಬಗ್ಗೆ ಪೋಸ್ಟ್‌ ಮಾಡಿದ್ರೆ ನಿಮಗ್ಯಾಕೆ ಕೋಪ? ದರ್ಶನ್‌ಗೆ ಪೊಲೀಸರ ಪ್ರಶ್ನೆಗಳ ಸುರಿಮಳೆ

Actor Darshan
ಸಿನಿಮಾ3 days ago

Actor Darshan : ದರ್ಶನ್‌ ಜೈಲಿಗೆ ಹೋಗುತ್ತಿರುವುದು ಇದೇ ಮೊದಲಲ್ಲ; ನಟನ ಮೇಲಿವೆ ಹತ್ತಾರು ಕೇಸ್‌ಗಳು!

Saptami Gowda
ಸಿನಿಮಾ3 days ago

Saptami Gowda : ಯುವ ಪತ್ನಿ ಶ್ರೀದೇವಿ ವಿರುದ್ಧ ಮಾನಹಾನಿ ಕೇಸ್; ಕಾನೂನು ಹೋರಾಟಕ್ಕೆ ಮುಂದಾದ ನಟಿ ಸಪ್ತಮಿ ಗೌಡ!

Karnataka weather Forecast
ಮಳೆ4 days ago

Karnataka Weather : ಭಾರಿ ಮಳೆಗೆ ಮನೆ ಗೋಡೆ ಕುಸಿದು ಎಮ್ಮೆಗಳು ಸಾವು; ಆಕಳಿನ ಜೀವ ತೆಗೆದ ವಿದ್ಯುತ್‌ ತಂತಿ

Karnataka weather Forecast
ಮಳೆ7 days ago

Karnataka weather : ಮಳೆಯಲ್ಲೆ ತಪಸ್ಸಿಗೆ ಕುಳಿತ ವೃದ್ಧ; ಇನ್ನೊಂದು ವಾರ ನಾನ್‌ ಸ್ಟಾಪ್‌ ವರುಣನ ಅಬ್ಬರ

Sigandur launch
ಶಿವಮೊಗ್ಗ7 days ago

Sigandur launch: ಸಿಗಂದೂರು ಲಾಂಚ್‌ನಲ್ಲಿ ಭಾರಿ ವಾಹನಗಳಿಗೆ ನಿರ್ಬಂಧ

Karnataka Rain
ಮಳೆ1 week ago

Karnataka Rain : ಭಾರಿ ಮಳೆಗೆ ಮರ ಬಿದ್ದು ಮೇಕೆಗಳು ಸಾವು; ಸಿಡಿಲಿಗೆ ಎಲೆಕ್ಟ್ರಿಕ್‌ ಅಂಗಡಿ ಸುಟ್ಟು ಭಸ್ಮ

Lok Sabha Election Result 2024 Live
ದೇಶ1 week ago

Lok Sabha Election Result 2024 Live: ಲೋಕಸಭೆ ಚುನಾವಣೆ ಫಲಿತಾಂಶದ ಲೈವ್‌ ಇಲ್ಲಿ ವೀಕ್ಷಿಸಿ

ಟ್ರೆಂಡಿಂಗ್‌