Kannada Serials TRP: ʻಗೀತಾʼ ಧಾರಾವಾಹಿಯ ಓಟ ಶುರು; ಎರಡನೇ ಸ್ಥಾನದಲ್ಲಿ ʻಸೀತಾ ರಾಮʼ! - Vistara News

ಕಿರುತೆರೆ

Kannada Serials TRP: ʻಗೀತಾʼ ಧಾರಾವಾಹಿಯ ಓಟ ಶುರು; ಎರಡನೇ ಸ್ಥಾನದಲ್ಲಿ ʻಸೀತಾ ರಾಮʼ!

ಈ ವಾರದ ಕನ್ನಡ ಕಿರುತೆರೆಯ ಟಿಆರ್‌ಪಿ (Kannada Serials TRP) ಹೊರಬಿದ್ದಿದೆ. ವಿಶೇಷ ಎಂಬಂತೆ ಕಲರ್ಸ್ ಕನ್ನಡದಲ್ಲಿ ಪ್ರಸಾರ ಕಾಣುತ್ತಿರುವ ‘ಗೀತಾ’ ಧಾರಾವಾಹಿಯ (geeta serial) ಟಿಆರ್​ಪಿ ಏಕಾಏಕಿ ಏರಿಕೆ ಕಂಡಿದೆ.

VISTARANEWS.COM


on

kannada serials
ಮಹತ್ವದ, ಕುತೂಹಲಕರ ಸುದ್ದಿಗಾಗಿ ಫಾಲೊ ಮಾಡಿ
Koo

‘ಸೀತಾ ರಾಮ’ ಧಾರಾವಾಹಿ ಇದೀಗ ಪುಟ್ಟಕ್ಕನ ಮಕ್ಕಳು ಧಾರಾವಾಹಿಗೆ ಪೈಪೋಟಿ ನೀಡಲು ರೆಡಿಯಾಗಿದೆ. ಈ ಪೈಕಿ ‘ಪುಟ್ಟಕ್ಕನ ಮಕ್ಕಳು’ (Puttakkana Makkalu Serial) ಮೊದಲ ಸ್ಥಾನದಲ್ಲಿದೆ. ‘ಸೀತಾ ರಾಮ’ ಧಾರಾವಾಹಿ (Seetha Raama) ಎರಡನೇ ಸ್ಥಾನ ಪಡೆದುಕೊಂಡಿದೆ. ಈ ವಾರದ ಕನ್ನಡ ಕಿರುತೆರೆಯ ಟಿಆರ್‌ಪಿ (Kannada Serials TRP) ಹೊರಬಿದ್ದಿದೆ. ವಿಶೇಷ ಎಂಬಂತೆ ಕಲರ್ಸ್ ಕನ್ನಡದಲ್ಲಿ ಪ್ರಸಾರ ಕಾಣುತ್ತಿರುವ ‘ಗೀತಾ’ ಧಾರಾವಾಹಿಯ (geeta serial) ಟಿಆರ್​ಪಿ ಏಕಾಏಕಿ ಏರಿಕೆ ಕಂಡಿದೆ.

ಪುಟ್ಟಕ್ಕನ ಮಕ್ಕಳು

ಉಮಾಶ್ರೀ ನಟನೆಯ ‘ಪುಟ್ಟಕ್ಕನ ಮಕ್ಕಳು’ ಧಾರಾವಾಹಿ ಮೊದಲ ಸ್ಥಾನವನ್ನು ಉಳಿಸಿಕೊಂಡು ಬರುತ್ತಲೇ ಇದೆ. ಈಗಲೂ ಒಳ್ಳೆಯ ಟಿಆರ್​ಪಿಯೊಂದಿಗೆ ಈ ಧಾರಾವಾಹಿ ಮುನ್ನುಗ್ಗುತ್ತಿದೆ. ರಮೇಶ್ ಪಂಡಿತ್, ಉಮಾಶ್ರೀ, ಅಕ್ಷರಾ, ಸಂಜನಾ ಬುರ್ಲಿ, ಮಂಜು ಭಾಷಿಣಿ, ಹಂಸ, ಧನುಷ್, ಸೂರಜ್ ಹೊಳ್ಳ, ಪವನ್ ಕುಮಾರ್ ಮುಂತಾದವರು ಈ ಧಾರಾವಾಹಿಯಲ್ಲಿ ನಟಿಸುತ್ತಿದ್ದಾರೆ. ಜೀ ವಾಹಿನಿಯಲ್ಲಿ ಈ ಧಾರಾವಾಹಿ ಪ್ರಸಾರ ಕಾಣುತ್ತಿದೆ. ಈಗಾಗಲೇ ಪುಟ್ಟಕ್ಕನ ಎರಡನೇ ಮಗಳಿಗೆ ಗಂಡ ಅನಕ್ಷರಸ್ಥ ಎಂಬುದು ತಿಳಿಯುವ ಹಂತದಲ್ಲಿದೆ. ಕೆಲವು ಪ್ರಮುಖ ತಿರುವುಗಳಲ್ಲಿ ಧಾರಾವಾಹಿಯ ಕಥೆ ಸಾಗಿದ್ದರಿಂದ ಈ ಧಾರಾವಾಹಿಯ ಟಿಆರ್​ಪಿ ಹೆಚ್ಚಿದೆ.

ಸೀತಾ ರಾಮ

‘ಸೀತಾ ರಾಮ’ ಧಾರಾವಾಹಿ ಕಳೆದ ವಾರವೂ ಎರಡನೇ ಸ್ಥಾನದಲ್ಲಿ ಇತ್ತು. ಈ ವಾರವೂ ಎರಡನೇ ಸ್ಥಾನ ಪಡೆದುಕೊಂಡಿದೆ. ರಾಮ ಹಾಗೂ ಸೀತಾ (ವೈಷ್ಣವಿ-ಗಗನ್) ಮಧ್ಯೆ ಈಗ ತಾನೇ ಆಪ್ತತೆ ಮೂಡುತ್ತಿದೆ. ವೈಷ್ಣವಿ ಗೌಡ, ಗಗನ್ ಚಿನ್ನಪ್ಪ ಹಾಗೂ ರೀತು ಸಿಂಗ್ ಈ ಧಾರಾವಾಹಿಯಲ್ಲಿ ಮುಖ್ಯಭೂಮಿಕೆ ನಿರ್ವಹಿಸಿದ್ದಾರೆ. ರೀತು ಸಿಂಗ್ ಹೆಸರಿನ ಬಾಲಕಿ ವೈಷ್ಣವಿ ಗೌಡ ಮಗಳಾಗಿ ಧಾರಾವಾಹಿಯಲ್ಲಿ ನಟಿಸುತ್ತಿದ್ದಾಳೆ. ಈಕೆಯ ನಟನೆ ಪ್ರೇಕ್ಷಕರಿಗೆ ಇಷ್ಟವಾಗುತ್ತಿದೆ. ಸೀತಾ ರಾಮ ಜೀ ಕನ್ನಡದಲ್ಲಿ ಪ್ರಸಾರ ಕಾಣುತ್ತಿದೆ.

ಇದನ್ನೂ ಓದಿ: Kannada Serials TRP: ʻಗಟ್ಟಿಮೇಳʼ ಹಿಂದಿಕ್ಕಿದ ʻಸೀತಾ ರಾಮʼ; ಹೊಸ ಧಾರಾವಾಹಿಗಳದ್ದೇ ಕಾರುಬಾರು!

‘ಗಟ್ಟಿಮೇಳ’

‘ಗಟ್ಟಿಮೇಳ’ ಮೂರನೇ ಸ್ಥಾನದಲ್ಲಿದೆ. ರಕ್ಷಿತ್ ಗೌಡ, ನಿಶಾ ರವಿಕೃಷ್ಣನ್, ಸುಧಾ ನರಸಿಂಹರಾಜು ಮೊದಲಾದವರು ನಟಿಸಿದ್ದಾರೆ. ‘ಗಟ್ಟಿಮೇಳ’ ಧಾರಾವಾಹಿ ಮಧ್ಯಮ ವರ್ಗದ ಮನೆಯ ಹೆಣ್ಣು ಮಕ್ಕಳನ್ನು ಹೇಗೆ ಪರಿಮಳಾ ಹಾಗೂ ಮಂಜುನಾಥ್ ದಂಪತಿ ಮದುವೆ ಮಾಡುತ್ತಾರೆ ಎಂಬುದು ಒನ್‌ಲೈನ್‌ ಸ್ಟೋರಿ. ಜೀ ವಾಹಿನಿಯಲ್ಲಿ ಈ ಧಾರಾವಾಹಿ ಪ್ರಸಾರ ಕಾಣುತ್ತಿದೆ.

ಶ್ರೀರಸ್ತು ಶುಭಮಸ್ತು

ಸುಧಾರಾಣಿ ನಟಿಸುತ್ತಿರುವ ‘ಶ್ರೀರಸ್ತು ಶುಭಮಸ್ತು’ ಧಾರಾವಾಹಿ ನಾಲ್ಕನೇ ಸ್ಥಾನ ಪಡೆದುಕೊಂಡಿದೆ. ಈಗಾಗಲೇ ಸುಧಾರಾಣಿ ಮದುವೆಯಾಗಿ ಮಾಧವನ ಮನೆ ಸೇರಿದ್ದಾರೆ. ಕುಟುಂಬಗಳ ಮಧ್ಯೆ ಭಿನ್ನಾಭಿಪ್ರಾಯಗಳು ಶೂರುವಾಗಿದೆ. ಈ ಧಾರಾವಾಹಿ ಜೀ ಕನ್ನಡದಲ್ಲಿ ಪ್ರಸಾರ ಕಾಣುತ್ತಿದೆ.

ಅಮೃತಧಾರೆ

ಅಮೃತಧಾರೆ ಧಾರಾವಾಹಿಯಲ್ಲಿ ಮದುವೆ ಸಂಭ್ರಮ ಮನೆ ಮಾಡಿದೆ. ಗೌತಮ್-ಭೂಮಿಕಾ ಮದುವೆ ನಡೆಯುತ್ತಿದೆ. ಈ ಧಾರಾವಾಹಿ ಈ ಬಾರಿ ಐದನೇ ಸ್ಥಾನ ಅಲಂಕರಿಸಿದೆ.  ಹೀಗಾಗಿ 34ನೇ ವಾರದಲ್ಲಿ ಟಿಆರ್​ಪಿ ಹೆಚ್ಚಬಹುದು.

ಇದನ್ನೂ ಓದಿ: Kannada Serials TRP: ಡೇಂಜರ್ ಝೋನ್‌ನಲ್ಲಿ ʻಗಟ್ಟಿಮೇಳʼ; ಟಾಪ್‌ 6ರಲ್ಲಿ ಪ್ರಮುಖ ಧಾರಾವಾಹಿ ಇಲ್ವೇ ಇಲ್ಲ!

ಸತ್ಯ

ಕಳೆದ ವಾರ ಈ ಧಾರಾವಾಹಿ ನಾಲ್ಕನೇ ಸ್ಥಾನದಲ್ಲಿತ್ತು. ಈ ವಾರ ಆರನೇ ಸ್ಥಾನದಲ್ಲಿದೆ. ಜೀ ಕನ್ನಡದಲ್ಲಿ ಪ್ರಸಾರ ಆಗುತ್ತಿರುವ ‘ಸತ್ಯ’ ಧಾರಾವಾಹಿಯಲ್ಲಿ ಲಕ್ಷ್ಮಣ ಎರಡನೇ ಮದುವೆಯಾಗಿರೋದು, ಅವನಿಗೆ ಮದುವೆ ಆಗಿರೋದು ಸತ್ಯಗೆ ಗೊತ್ತಾಗಿದೆ. ಈ ವಿಷಯ ಇಡೀ ಕುಟುಂಬಕ್ಕೆ ಗೊತ್ತಾದರೆ ಏನಾಗಬಹುದು? ಊರ್ಮಿಳಾ ಗಂಡನ ಈ ಮೋಸವನ್ನು ಹೇಗೆ ಸಹಿಸುತ್ತಾಳೆ ಎಂದು ಕಾದು ನೋಡಬೇಕಿದೆ. ಜೀ ಕನ್ನಡದಲ್ಲಿ ಪ್ರಸಾರ ಕಾಣುತ್ತಿದೆ.

ಏಳನೇ ಸ್ಥಾನದಲ್ಲಿ ‘ಲಕ್ಷ್ಮಿ ಬಾರಮ್ಮ’ ಧಾರಾವಾಹಿ ಇದೆ. ಈ ಬಾರಿ ‘ಗೀತಾ’ ಧಾರಾವಾಹಿಗೆ ಒಳ್ಳೆಯ ಟಿಆರ್​ಪಿ ಸಿಕ್ಕಿದೆ. ಹೀಗಾಗಿ, ಈ ಧಾರಾವಾಹಿಗೆ ಎಂಟನೇ ಸ್ಥಾನ ಸಿಕ್ಕಿದೆ. ಈ ಎರಡೂ ಧಾರಾವಾಹಿಗಳು ಕಲರ್ಸ್‌ ಕನ್ನಡದಲ್ಲಿ ಪ್ರಸಾರ ಕಾಣುತ್ತಿದೆ.

ಕ್ಷಣ ಕ್ಷಣದ ಮಾಹಿತಿಗಾಗಿ Vistara News FaceBook ಪೇಜ್ ಫಾಲೋ ಮಾಡಿ
ಮಹತ್ವದ ಮಾಹಿತಿಗಾಗಿ ವಿಸ್ತಾರ ನ್ಯೂಸ್ ಆ್ಯಪ್ ಉಚಿತವಾಗಿ ಡೌನ್ ಲೋಡ್ ಮಾಡಿಕೊಳ್ಳಿ: Andriod App | IOS App
Continue Reading
Click to comment

Leave a Reply

Your email address will not be published. Required fields are marked *

ಕಿರುತೆರೆ

Ninagagi Kannada Serial: ʻನಿನಗಾಗಿʼ ಸೀರಿಯಲ್‌ನಲ್ಲಿ ದಿವ್ಯಾ ಉರುಡುಗ ಜತೆ ‘ಗಿಣಿರಾಮ’ ಧಾರಾವಾಹಿಯ ನಟ ನಟನೆ

Ninagagi Kannada Serial: ದಿವ್ಯಾ ಉರುಡುಗ ಇದೀಗ ಮತ್ತೆ ಕಿರುತೆರೆಗೆ ಕಮ್ ಬ್ಯಾಕ್ ಮಾಡಿದ್ದಾರೆ.‌ ರಚನಾ ಪಾತ್ರದಲ್ಲಿ ದಿವ್ಯಾ ನಟಿಸುತ್ತಿದ್ದಾರೆ. ‘ನಿನಗಾಗಿ’ ಧಾರಾವಾಹಿಯ ಕಥೆ ಸೂಪರ್ ಸ್ಟಾರ್ ರಚನಾ ಸುತ್ತ ಸುತ್ತಲಿದೆ. ಚಿತ್ರರಂಗದ ಲೇಡಿ ಸೂಪರ್ ಸ್ಟಾರ್ ಆಗಿರುವ ರಚನಾಗೆ ಕೋಟ್ಯಂತರ ಅಭಿಮಾನಿಗಳ ಪ್ರೀತಿ, ಆಶೀರ್ವಾದ ಇದೆ. ಆದರೆ, ಅದ್ಯಾಕೋ ರಚನಾಗೆ ಅಮ್ಮನ ಪ್ರೀತಿ ಇಲ್ಲ. ಸೂಪರ್ ಸ್ಟಾರ್ ಆಗಿದ್ದರೂ, ಅಮ್ಮನ ಪ್ರೀತಿ ಕಾಣದ ನಟಿಯ ಕಥೆ ‘ನಿನಗಾಗಿ’.

VISTARANEWS.COM


on

Ninagagi Kannada Serial Ritvvikk Mathad Playing Lead In Divya Uruduga
Koo

ಬೆಂಗಳೂರು: ಕನ್ನಡ ಕಿರುತೆರೆ ಲೋಕದಲ್ಲಿ ಕಲರ್ಸ್ ಕನ್ನಡ ವಾಹಿನಿ (Ninagagi Kannada Serial) ವಿಭಿನ್ನ ಬಗೆಯ ಸೀರಿಯಲ್‌ಗಳ ಮೂಲಕ ಪ್ರೇಕ್ಷಕರನ್ನು ರಂಜಿಸುತ್ತಿದೆ. ಇದೀಗ ಮತ್ತೊಂದು ಹೊಸ ಕಥೆ ಮೂಲಕ ಕಿರುತೆರೆ ಪ್ರೇಕ್ಷಕರ ಎದುರು ಬರುತ್ತಿದೆ. ಬೇರೆ ಬೇರೆ ವ್ಯಕ್ತಿತ್ವದ ಇಬ್ಬರು ವ್ಯಕ್ತಿಗಳು ಒಟ್ಟಿಗೆ ಸಾಗುವ ಮನ ಮಿಡಿಯ ಧಾರಾವಾಹಿ ʻನಿನನಾಗಿʼ ಇದೇ 27ನೇ ತಾರೀಖಿನಿಂದ ಶುರುವಾಗುತ್ತಿದೆ. ಸೋಮವಾರದಿಂದ ಶುಕ್ರವಾರದವರೆಗೆ ರಾತ್ರಿ 8 ಗಂಟೆಗೆ ನಿನಗಾಗಿ ಸೀರಿಯಲ್ ಪ್ರಸಾರವಾಗಲಿದೆ. ಈ ಹಿನ್ನೆಲೆ ಇಡೀ ತಂಡ ಮಾಧ್ಯಮದರೊಂದಿಗೆ ಮಾಹಿತಿ ಹಂಚಿಕೊಂಡಿತು.

ಬೆಂಗಳೂರಿನ ಅಕ್ಷಯ್ ಸ್ಟುಡಿಯೋದಲ್ಲಿ ಸುದ್ದಿಗೋಷ್ಠಿ ಆಯೋಜಿಸಲಾಗಿತ್ತು. ಈ ವೇಳೆ ನಿರ್ದೇಶಕ ಸಂಪಥ್ವಿ ಮಾತನಾಡಿ, ʻʻತುಂಬಾ ಎಕ್ಸೈಟ್ ಆಗಿದ್ದೇನೆ. ಯಾಕೆಂದರೆ ಹೆಮ್ಮೆಯಿಂದ ಹೇಳುತ್ತೇನೆ.‌ ಒಂದೊಳ್ಳೆ ಪ್ರಾಜೆಕ್ಟ್ ತೆಗೆದುಕೊಂಡು ಬಂದಿದ್ದೇನೆ. ನಿನಗಾಗಿ ಶೋ ಬಂದ‌ ಮೇಲೆ ತುಂಬಾ ಸ್ಕೋರ್ ಮಾಡುತ್ತದೆ. ಯಾಕೆಂದರೆ ನನ್ನ ಬೆಂಬಲವಾಗಿ ನಿಂತಿರುವವರು ಜೈ ಮಾತಾ ಕಂಬೈನ್ಸ್ ನ ಅಶ್ವಿನಿ‌ ಮೇಡಂ. ಇಡೀ‌ ಕಲರ್ಸ್ ತಂಡ. ಪ್ರತಿಯೊಬ್ಬರಿಗೂ ಸಪೋರ್ಟಿವ್ ಆಗಿತು. ಈ ಪ್ರಾಜೆಕ್ಟ್ ಮಾಡಿಸಿದ್ದಾರೆ. ಈ ಪ್ರಾಜೆಕ್ಟ್ ಕಲರ್ಸ್‌ಗೆ ಗೆಲುವು ತಂದುಕೊಡುತ್ತದೆ. ನಾಯಕ ಒಂದು ಪಡೆಯಾದರೆ, ನಾಯಕಿ ಕೂಡ ಒಂದು ಪಡೆ. ಇವರೆಲ್ಲಾ ಬಲ ತಂದುಕೊಡುತ್ತಿದ್ದಾರೆ. ಪ್ರೋವೋ ನೋಡಿ ಇಷ್ಟಪಟ್ಟಿದ್ದೀರಾ. ನಾನು ಈ ಹಿಂದೆ ನಮ್ಮನೆ ಯುವರಾಣಿ ಸೀರಿಯಲ್ ಮಾಡಿದ್ದೇನೆ. ಈ ಬಾರಿ ಒಂದು ಹೊಸ ಕಥೆ ಹೇಳಲು ಬರುತ್ತಿದ್ದೇವೆʼʼ ಎಂದರು.

ಇದನ್ನೂ ಓದಿ: Kannada Serials TRP: ಈ ವಾರ ಟಿಆರ್‌ಪಿಯಲ್ಲಿʻ ಪುಟ್ಟಕ್ಕನ ಮಕ್ಕಳುʼ ಟಾಪ್‌ 1: ಕಲರ್ಸ್‌ನಲ್ಲಿ ‘ರಾಮಾಚಾರಿ’ಗೆ ಮೊದಲ ಸ್ಥಾನ!

ನಾಯಕ ಋತ್ವಿಕ್ ಮಠದ್ ಮಾತನಾಡಿ, ʻʻಶಿವರಾಮ್ ಮಾಸ್‌ನಲ್ಲಿ‌ ನೋಡಿದ್ದೀರಾ. ಆದರೆ ಆ ಮಾಸ್ ಜೀವನ್‌ನಲ್ಲಿ ಇರುವುದಿಲ್ಲ. ತುಂಬಾ ಸರಳ ವ್ಯಕ್ತಿ.‌ಒಬ್ಬ ಮಗುವಿನ ತಂದೆ. ದುಡ್ಡಿನ ಹಿಂದೆ ಹೋಗುವ ಮನುಷ್ಯ ಅಲ್ಲ. ಆ ರೀತಿ ಪಾತ್ರ ಮಾಡುತ್ತಿದ್ದೇನೆʼʼ ಎಂದು ಮಾಹಿತಿ ನೀಡಿದರು.

ನಾಯಕಿ ದಿವ್ಯಾ ಉರುಡುಗ ಮಾತನಾಡಿ, ʻʻನನಗೆ ಹೆಮ್ಮೆ ಅನಿಸುತ್ತದೆ. ಪ್ರತಿ ವಿಷಯದಲ್ಲಿಯೂ ಯೂನಿಕ್ ಆಗಿ ಮಾಡುತ್ತಿದ್ದೇವೆ. ರಚ್ಚು ಎಂಬ ಮುದ್ದಾದ ಹುಡುಗಿ ಪಾತ್ರ ಮಾಡುತ್ತಿದ್ದೇನೆ. ರಚ್ಚು ಎಂಬ ಸೂಪರ್ ಸ್ಟಾರ್ ಸಿಂಪಲ್ ಆಗಿ ಲೈಫ್ ಲೀಡ್ ಮಾಡುವ ಕನಸು ಕಾಣುತ್ತಾ ಇರುತ್ತಾಳೆ. ಅಮ್ಮನ ಮಾತೇ ವೇದ ವಾಕ್ಯ.‌ ಆ ರೀತಿ ಪಾತ್ರ ನನ್ನದು. ಅವಳ ವೈಯಕ್ತಿಕ ಜೀವನ, ಅವಳ ಆಸೆ ನೆರವೇರುತ್ತಾ? ಅನ್ನೋದನ್ನು ನೀವು ನೋಡ್ಬೇಕು.‌ಒಂದೊಳ್ಳೆ ತಂಡದ ಜೊತೆ ಕೆಲಸ‌ ಮಾಡುತ್ತಿರುವ ಖುಷಿ ಇದೆ. ಸಿನಿಮಾ ರೀತಿಯೇ ಸೀರಿಯಲ್ ಶೂಟ್ ಮಾಡಲಾಗುತ್ತಿದೆʼʼ ಎಂದರು.

ದಿವ್ಯಾ ಉರುಡುಗ ಇದೀಗ ಮತ್ತೆ ಕಿರುತೆರೆಗೆ ಕಮ್ ಬ್ಯಾಕ್ ಮಾಡಿದ್ದಾರೆ.‌ ರಚನಾ ಪಾತ್ರದಲ್ಲಿ ದಿವ್ಯಾ ನಟಿಸುತ್ತಿದ್ದಾರೆ. ‘ನಿನಗಾಗಿ’ ಧಾರಾವಾಹಿಯ ಕಥೆ ಸೂಪರ್ ಸ್ಟಾರ್ ರಚನಾ ಸುತ್ತ ಸುತ್ತಲಿದೆ. ಚಿತ್ರರಂಗದ ಲೇಡಿ ಸೂಪರ್ ಸ್ಟಾರ್ ಆಗಿರುವ ರಚನಾಗೆ ಕೋಟ್ಯಂತರ ಅಭಿಮಾನಿಗಳ ಪ್ರೀತಿ, ಆಶೀರ್ವಾದ ಇದೆ. ಆದರೆ, ಅದ್ಯಾಕೋ ರಚನಾಗೆ ಅಮ್ಮನ ಪ್ರೀತಿ ಇಲ್ಲ. ಸೂಪರ್ ಸ್ಟಾರ್ ಆಗಿದ್ದರೂ, ಅಮ್ಮನ ಪ್ರೀತಿ ಕಾಣದ ನಟಿಯ ಕಥೆ ‘ನಿನಗಾಗಿ’.

ನಿನಗಾಗಿ’ ಧಾರಾವಾಹಿಯಲ್ಲಿ ಕಥಾನಾಯಕನಾಗಿ ರಿತ್ವಿಕ್ ಮಠದ್ ಅಭಿನಯಿಸುತ್ತಿದ್ದಾರೆ. ತಾರಾಗಣದಲ್ಲಿ ಪ್ರಿಯಾಂಕ ಕಾಮತ್, ಕಿಶನ್ ಬೆಳಗಲಿ, ವಿಜಯ್ ಕೌಂಡಿನ್ಯ, ಸಿರಿ ಸಿಂಚನ ಮುಂತಾದವರಿದ್ದಾರೆ.

ನಮ್ಮನೆ ಯುವರಾಣಿಯನ್ನು ನಿರ್ದೇಶಿಸಿದ್ದ ಸಂಪೃಥ್ವಿ ‘ನಿನಗಾಗಿʼಯ ಸೂತ್ರಧಾರಿ. ಭಾಗ್ಯಲಕ್ಷ್ಮಿ, ನಮ್ಮನೆ ಯುವರಾಣಿ, ಕನ್ನಡತಿಯಂಥ ಸುಪರ್ ಹಿಟ್ ಧಾರಾವಾಹಿಗಳನ್ನು ನಿರ್ಮಿಸಿದ ಜೈ ಮಾತಾ ಕಂಬೈನ್ಸ್ ‘ನಿನಗಾಗಿʼಯ ನಿರ್ಮಾಣದ ಹೊಣೆ ಹೊತ್ತಿದೆ.

Continue Reading

ಕಿರುತೆರೆ

Pavithra Jayaram: ನನ್ನ ಗಂಡನಿಗೂ ಪವಿತ್ರಾಗೂ ‘ಸಂಬಂಧ’ ಇದ್ದದ್ದು ನಿಜ ಎಂದ ಚಂದ್ರಕಾಂತ್‌ ಪತ್ನಿ!

Pavithra Jayaram: ಘಟನೆಯಿಂದ ಖಿನ್ನತೆಗೊಳಗಾಗಿ ಚಂದ್ರಕಾಂತ್‌ ಅವರು ನೇಣಿಗೆ ಶರಣಾಗಿದ್ದಾರೆ ಎಂದು ವರದಿಯಾಗಿತ್ತು. ಈ ಬಗ್ಗೆ ಪವಿತ್ರಾ ಮಗಳು ಅಮ್ಮ ಹಾಗೂ ಚಂದ್ರಕಾಂತ್‌ ಉತ್ತಮ ಸ್ನೇಹಿತರಾಗಿದ್ದರು. ಬೇರೆ ಯಾವುದೇ ರೀತಿಯ ಸಂಬಂಧ ಇರಲಿಲ್ಲ ಎಂದು ಹೇಳಿಕೆ ನೀಡಿದ್ದರು. ಇದೀಗ ಚಂದ್ರಕಾಂತ್‌ ಅವರ ಪತ್ನಿ ಶಿಲ್ಪಾ ಪ್ರೇಮಾ ಇಬ್ಬರ ಮಧ್ಯೆ ಸಂಬಂಧ ಇತ್ತು ಎಂದು ಹೇಳಿಕೆ ನೀಡಿದ್ದಾರೆ.

VISTARANEWS.COM


on

Pavitra Jayaram Relationship With Chandu Shilpa Prema statement
Koo

ಬೆಂಗಳೂರು: ತೆಲುಗಿನ ‘ತ್ರಿನಯನಿ’ ಧಾರಾವಾಹಿಯಲ್ಲಿ (Trinayani Serial) ಜನಪ್ರಿಯರಾಗಿದ್ದ ಕನ್ನಡತಿ ಪವಿತ್ರ ಜಯರಾಮ್ (Pavithra Jayaram)‌ ಅವರು ಅಪಘಾತದಲ್ಲಿ ಮೃತಪಟ್ಟ ಬೆನ್ನಲ್ಲೇ ನಟ ಚಂದ್ರಕಾಂತ್‌ (Chandrakanth) ಆತ್ಮಹತ್ಯೆ ಮಾಡಿಕೊಂಡರು. ಇದಾದ ಬಳಿಕ ಈ ಘಟನೆಯಿಂದ ಖಿನ್ನತೆಗೊಳಗಾಗಿ ಚಂದ್ರಕಾಂತ್‌ ಅವರು ನೇಣಿಗೆ ಶರಣಾಗಿದ್ದಾರೆ ಎಂದು ವರದಿಯಾಗಿತ್ತು. ಈ ಬಗ್ಗೆ ಪವಿತ್ರಾ ಮಗಳು ಅಮ್ಮ ಹಾಗೂ ಚಂದ್ರಕಾಂತ್‌ ಉತ್ತಮ ಸ್ನೇಹಿತರಾಗಿದ್ದರು. ಬೇರೆ ಯಾವುದೇ ರೀತಿಯ ಸಂಬಂಧ ಇರಲಿಲ್ಲ ಎಂದು ಹೇಳಿಕೆ ನೀಡಿದ್ದರು. ಇದೀಗ ಚಂದ್ರಕಾಂತ್‌ ಅವರ ಪತ್ನಿ ಶಿಲ್ಪಾ ಪ್ರೇಮಾ ಇಬ್ಬರ ಮಧ್ಯೆ ಸಂಬಂಧ ಇತ್ತು ಎಂದು ಹೇಳಿಕೆ ನೀಡಿದ್ದಾರೆ.

ಶಿಲ್ಪಾ ಪ್ರೇಮಾ ಈ ಬಗ್ಗೆ ಮಾತನಾಡಿ ʻʻಇಬ್ಬರ ಮಧ್ಯೆ ಸಂಬಂಧ ಇರುವುದು 5 ವರ್ಷ ಮುಂಚೆಯೇ ತಿಳಿದಿತ್ತು. ನನಗೆ ಗೊತ್ತಾದ ಮೇಲೆ ರಾತ್ರಿಯೆಲ್ಲ ಕುಡಿದು ನನಗೆ ಚಂದ್ರಕಾಂತ್‌ ಹೊಡೆಯುತ್ತಿದ್ದರು. ಒಮ್ಮೆ ಪವಿತ್ರಾ ಕೂಡ ನನಗೆ ನೇರವಾಗಿ ಕೆರೆ ಮಾಡಿ ಅವನು ನನ್ನ ಗಂಡ, ಏನು ಮಾಡಿಕೊಳ್ಳುತ್ತೀಯಾ ಮಾಡಿಕೋ ಎಂದು ಹೇಳಿದ್ದಳು. ಈ ವಿಚಾರ ಪವಿತ್ರಾ ಮಕ್ಕಳಿಗೂ ಗೊತ್ತಿತ್ತು. ಅವರ ಲೈಫ್ ಅವರದ್ದು ಅವರ ವಿಚಾರಕ್ಕೆ ಆಕ್ಷೇಪ ವ್ಯಕ್ತಪಡಿಸಲ್ಲ ಎಂದು ಪವಿತ್ರಾ ಮಗ ಹೇಳಿದ್ದ. ಮನೆಗೆ ಬಂದರೂ ಪವಿತ್ರಾ ಫೋಟೊವನ್ನು ಚಂದ್ರಕಾಂತ್‌ ನೋಡುತ್ತಿದ್ದರು. ಇವರೂ ನನಗೆ ಸಹಾಯ ಮಾಡದೇ ಇದ್ದರೂ ನನ್ನ ಮಕ್ಕಳನ್ನು ನಾನೇ ಸಲುಹಿದೆʼʼ ಎಂದರು.

ಮಾಧ್ಯಮವೊಂದಕ್ಕೆ ಚಂದ್ರಕಾಂತ್‌ ತಾಯಿ ಕೂಡ ಮಾತನಾಡಿ ʻʻಪವಿತ್ರಾ ನನ್ನ ಮಗನನ್ನು ಮನೆಗೆ ಬರದೇ ಇರುವ ರೀತಿ ಮಾಡಿದ್ದಾಳೆ. ನನ್ನ ಎಲ್ಲಾ ಸರ್ವಸ್ವ ಪವಿತ್ರಾ, ಅವಳೇ ನನ್ನ ಹೆಂಡತಿ ಎನ್ನುತ್ತಿದ್ದ. ಮನೆಗೆ ಕುಡಿದು ಬಂದು ಹೆಂಡತಿಯನ್ನು ಹೊಡೆಯುತ್ತಿದ್ದ. ಅವಳ ಸಹವಾಸ ಮಾಡಬೇಡ ಎಂದು ಹೇಳಿದರೂ ಕೇಳುತ್ತಿರಲಿಲ್ಲʼʼ ಎಂದರು.

ಇದನ್ನೂ ಓದಿ: Pavithra Jayaram: ಚಂದ್ರಕಾಂತ್‌ ಹಾಗೂ ನನ್ನ ಅಮ್ಮ ಜಸ್ಟ್‌ ಫ್ರೆಂಡ್ಸ್‌, ಪವಿತ್ರಾ ಮಗಳ ಸ್ಪಷ್ಟನೆ!

ಪವಿತ್ರಾ ಮಗಳ ಸ್ಪಷ್ಟನೆ ಏನು?

ಮಗಳು ಪ್ರತೀಕ್ಷಾ ಮಾತನಾಡಿ ʻ ಚಂದ್ರಕಾಂತ್‌ ಅವರ ಸಾವಿನ‌ ಸುದ್ದಿ ನಮಗೆ ಟಿವಿಯಲ್ಲಿ ನೋಡಿ ಗೊತ್ತಾಯ್ತು. ಚಂದ್ರಕಾಂತ್‌ ಮತ್ತು ನಮ್ಮಮ್ಮ‌ ಉತ್ತಮ ಸ್ನೇಹಿತರಾಗಿದ್ದರು. ಅವರ ಸಂಬಂಧದ ಬಗ್ಗೆ ಟಿವಿಯಲ್ಲಿ ಏನೇನೋ ಮಾತಾಡ್ತಿದ್ದಾರೆ. ಅಮ್ಮನ ಅಂತ್ಯಕ್ರಿಯೆ ಆಗೋವವರೆಗೂ ಚಂದ್ರಕಾಂತ್‌ ಇದ್ದು ಹೋಗಿದ್ದರು. ಚಂದ್ರಕಾಂತ್‌ ಅವರು ಹೈದರಾಬಾದ್‌ಗೆ ಹೋದ ನಂತರವೂ ನನಗೆ ಪೋನ್ ಮಾಡಿ ಮಾತನಾಡುತ್ತಿದ್ದರು. ಆರೋಗ್ಯ ಚೆನ್ನಾಗಿ ನೋಡ್ಕೊ, ಪರೀಕ್ಷೆ ಇದೆ ತಯಾರಿ ಮಾಡ್ಕೊ ಎಂದೆಲ್ಲಾ ಧೈರ್ಯ ಹೇಳ್ತಿದ್ದರು. ಆದರೆ ಈಗ ಹೀಗಾಗಿದೆ. ಅಮ್ಮ ಮತ್ತು ಚಂದ್ರಕಾಂತ್‌ ಉತ್ತಮ ಸ್ನೇಹಿತರಾಗಿದ್ದರು. ಅಮ್ಮ ಹೈದರಾಬಾದ್‌ಗೆ ತೆರಳಿ ಆರು ವರ್ಷ ಆಯ್ತು. ಆಗನಿಂದಲೂ ಚಂದ್ರಕಾಂತ್‌ ಅಮ್ಮನಿಗೆ ಪರಿಚಯ. ಒಂದೇ ಸಿರೀಯಲ್ ನಲ್ಲಿ ನಟನೆ ಮಾಡುವ ಸಹ ನಟರ ಜತೆಗಿನ ಸಂಬಂಧ ಹೇಗಿರೋತ್ತೊ ಅಮ್ಮ ಮತ್ತು ಚಂದ್ರಕಾಂತ್‌ ಅವರ ಸಂಬಂಧವೂ ಹಾಗೆ ಇತ್ತುʼʼ‌ ಎಂದರು.

ಮಾತು ಮುಂದುವರಿಸಿ ʻʻನನ್ನ ಅಮ್ಮ ಮತ್ತು ಅಪ್ಪ ಅವರ ಸಂಬಂಧ ಕೂಡ ಚೆನ್ನಾಗಿಯೇ ಇತ್ತು. ನಾನು, ಅಣ್ಣ ಇಬ್ಬರೂ ಕಳೆದ ಎರಡು ವರ್ಷಗಳಿಂದ ಅಮ್ಮನ ಜತೆಗೆ ಹೈದರಾಬಾದ್‌ನಲ್ಲಿ ನೆಲೆಸಿದ್ದೆವು. ಈಗ ನಾವು ನಮ್ಮ ಅಮ್ಮನನ್ನು ಕಳೆದುಕೊಂಡಿದ್ದೇವೆ. ಅವರು ನಮ್ಮ ಕುಟುಂಬದ ದೊಡ್ಡ ಪಿಲ್ಲರ್‌. ನಾವಿನ್ನ ಚಿಕ್ಕವರು. ನಮಗೂ ಭವಿಷ್ಯವಿದೆ. ಯಾರೂ ಅಮ್ಮನ ಸಂಬಂಧ ಬಗೆಗೆ ತಪ್ಪಾಗಿ ಮಾತಾಡಬೇಡಿ. ನಮ್ಮಷ್ಟಕ್ಕೆ ನಮ್ಮನ್ನು ಬದುಕಲು ಬಿಡಿʼʼ ಎಂದಿದ್ದಾರೆ ಪ್ರತೀಕ್ಷಾ.

Continue Reading

ಕಿರುತೆರೆ

Pavithra Jayaram: ಚಂದ್ರಕಾಂತ್‌ ಹಾಗೂ ನನ್ನ ಅಮ್ಮ ಜಸ್ಟ್‌ ಫ್ರೆಂಡ್ಸ್‌, ಪವಿತ್ರಾ ಮಗಳ ಸ್ಪಷ್ಟನೆ!

Pavithra Jayaram: ಆಂಧ್ರಪ್ರದೇಶದ ಕರ್ನೂಲು ಬಳಿ ಮೇ 12ರಂದು ಬೆಳಗ್ಗೆ ಅಪಘಾತ ಸಂಭವಿಸಿತ್ತು. ಮೂಲತಃ ಕನ್ನಡಿಗರಾದ ಪವಿತ್ರ ತೆಲುಗಿನ ತ್ರಿನಯನಿ ಧಾರವಾಹಿಯಲ್ಲಿ ಜನಪ್ರಿಯರಾಗಿದ್ದರು. ಕನ್ನಡದ ʻರೋಬೊ ಫ್ಯಾಮಿಲಿʼ ಮೂಲಕ ಕಿರುತೆರೆಗೆ ಎಂಟ್ರಿಕೊಟ್ಟಿದ್ದ ಪವಿತ್ರ ಮೂಲತಃ ಮಂಡ್ಯ ತಾಲೂಕಿನ ಹನಕೆರೆಯವರು. ನಟಿ ರೋಬೊ ಫ್ಯಾಮಿಲಿ, ಜೋಕಾಲಿ, ನೀಲಿ, ರಾಧಾರಮಣ ಧಾರವಾಹಿಯಲ್ಲಿ ನಟಿಸಿ ಮನೆಮಾತಾಗಿದ್ದರು.

VISTARANEWS.COM


on

Pavithra Jayaram Chandrakant are just friends, daughter said
Koo

ಮಂಡ್ಯ: ತೆಲುಗಿನ ‘ತ್ರಿನಯನಿ’ ಧಾರಾವಾಹಿಯಲ್ಲಿ (Trinayani Serial) ಜನಪ್ರಿಯರಾಗಿದ್ದ ಕನ್ನಡತಿ ಪವಿತ್ರ ಜಯರಾಮ್ (Pavithra Jayaram)‌ ಅವರು ಅಪಘಾತದಲ್ಲಿ ಮೃತಪಟ್ಟ ಬೆನ್ನಲ್ಲೇ ನಟ ಚಂದ್ರಕಾಂತ್‌ (Chandrakanth) ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಈ ಪ್ರಕರಣ ಬಗ್ಗೆ ಮಂಡ್ಯದ ಉಮ್ಮಡಹಳ್ಳಿಯಲ್ಲಿ ಪವಿತ್ರಾ ಅವರ ಮಗಳು ಪ್ರತೀಕ್ಷಾ ಅವರು ʻʻಅಮ್ಮ ಹಾಗೂ ಚಂದ್ರಕಾಂತ್‌ ಉತ್ತಮ ಸ್ನೇಹಿತರಾಗಿದ್ದರು. ಬೇರೆ ಯಾವುದೇ ರೀತಿಯ ಸಂಬಂಧ ಇರಲಿಲ್ಲʼʼ ಎಂದು ವಿಸ್ತಾರ ನ್ಯೂಸ್‌ಗೆ ಹೇಳಿಕೆ ನೀಡಿದ್ದಾರೆ.

ಪವಿತ್ರಾ ಜಯರಾಮ್‌ ಅವರ ನಿಧನದ ಬಳಿಕ ಖಿನ್ನತೆಗೊಳಗಾಗಿ ಚಂದ್ರಕಾಂತ್‌ ಅವರು ನೇಣಿಗೆ ಶರಣಾಗಿದ್ದಾರೆ ಎಂದು ವರದಿಯಾಗಿತ್ತು. ಈ ಬಗ್ಗೆ ಪವಿತ್ರಾ ಅವರ ಮಗಳು ಪ್ರತೀಕ್ಷಾ ಮಾತನಾಡಿ ʻ ಚಂದ್ರಕಾಂತ್‌ ಅವರ ಸಾವಿನ‌ ಸುದ್ದಿ ನಮಗೆ ಟಿವಿಯಲ್ಲಿ ನೋಡಿ ಗೊತ್ತಾಯ್ತು. ಚಂದ್ರಕಾಂತ್‌ ಮತ್ತು ನಮ್ಮಮ್ಮ‌ ಉತ್ತಮ ಸ್ನೇಹಿತರಾಗಿದ್ದರು. ಅವರ ಸಂಬಂಧದ ಬಗ್ಗೆ ಟಿವಿಯಲ್ಲಿ ಏನೇನೋ ಮಾತಾಡ್ತಿದ್ದಾರೆ. ಅಮ್ಮನ ಅಂತ್ಯಕ್ರಿಯೆ ಆಗೋವವರೆಗೂ ಚಂದ್ರಕಾಂತ್‌ ಇದ್ದು ಹೋಗಿದ್ದರು. ಚಂದ್ರಕಾಂತ್‌ ಅವರು ಹೈದರಾಬಾದ್‌ಗೆ ಹೋದ ನಂತರವೂ ನನಗೆ ಪೋನ್ ಮಾಡಿ ಮಾತನಾಡುತ್ತಿದ್ದರು. ಆರೋಗ್ಯ ಚೆನ್ನಾಗಿ ನೋಡ್ಕೊ, ಪರೀಕ್ಷೆ ಇದೆ ತಯಾರಿ ಮಾಡ್ಕೊ ಎಂದೆಲ್ಲಾ ಧೈರ್ಯ ಹೇಳ್ತಿದ್ದರು. ಆದರೆ ಈಗ ಹೀಗಾಗಿದೆ. ಅಮ್ಮ ಮತ್ತು ಚಂದ್ರಕಾಂತ್‌ ಉತ್ತಮ ಸ್ನೇಹಿತರಾಗಿದ್ದರು. ಅಮ್ಮ ಹೈದರಾಬಾದ್‌ಗೆ ತೆರಳಿ ಆರು ವರ್ಷ ಆಯ್ತು. ಆಗನಿಂದಲೂ ಚಂದ್ರಕಾಂತ್‌ ಅಮ್ಮನಿಗೆ ಪರಿಚಯ. ಒಂದೇ ಸಿರೀಯಲ್ ನಲ್ಲಿ ನಟನೆ ಮಾಡುವ ಸಹ ನಟರ ಜತೆಗಿನ ಸಂಬಂಧ ಹೇಗಿರೋತ್ತೊ ಅಮ್ಮ ಮತ್ತು ಚಂದ್ರಕಾಂತ್‌ ಅವರ ಸಂಬಂಧವೂ ಹಾಗೆ ಇತ್ತುʼʼಎಂದರು.

ಮಾತು ಮುಂದುವರಿಸಿ ʻʻನನ್ನ ಅಮ್ಮ ಮತ್ತು ಅಪ್ಪ ಅವರ ಸಂಬಂಧ ಕೂಡ ಚೆನ್ನಾಗಿಯೇ ಇತ್ತು. ನಾನು , ಅಣ್ಣ ಇಬ್ಬರೂ ಕಳೆದ ಎರಡು ವರ್ಷಗಳಿಂದ ಅಮ್ಮನ ಜತೆಗೆ ಹೈದರಾಬಾದ್‌ನಲ್ಲಿ ನೆಲೆಸಿದ್ದೆವು. ಈಗ ನಾವು ನಮ್ಮ ಅಮ್ಮನನ್ನು ಕಳೆದುಕೊಂಡಿದ್ದೇವೆ. ಅವರು ನಮ್ಮ ಕುಟುಂಬದ ದೊಡ್ಡ ಪಿಲ್ಲರ್‌. ನಾವಿನ್ನ ಚಿಕ್ಕವರು. ನಮಗೂ ಭವಿಷ್ಯವಿದೆ. ಯಾರೂ ಅಮ್ಮನ ಸಂಬಂಧ ಬಗೆಗೆ ತಪ್ಪಾಗಿ ಮಾತಾಡಬೇಡಿ. ನಮ್ಮಷ್ಟಕ್ಕೆ ನಮ್ಮನ್ನು ಬದುಕಲು ಬಿಡಿʼʼಎಂದಿದ್ದಾರೆ ಪ್ರತೀಕ್ಷಾ.

ಇದನ್ನೂ ಓದಿ: Actor Darshan: ಪವಿತ್ರಾ ಗೌಡ ಕೈ ಮೇಲೆ `777′ ಟ್ಯಾಟೂ ಹಾಕಿದ ನೀತು: ದರ್ಶನ್‌ಗೆ ಏನಾದ್ರು ಲಿಂಕ್‌ ಇದ್ಯಾ?

ದುರಂತ ಸಾವು

ಆಂಧ್ರಪ್ರದೇಶದ ಕರ್ನೂಲು ಬಳಿ ಮೇ 12ರಂದು ಬೆಳಗ್ಗೆ ಅಪಘಾತ ಸಂಭವಿಸಿತ್ತು. ಮೂಲತಃ ಕನ್ನಡಿಗರಾದ ಪವಿತ್ರ ತೆಲುಗಿನ ತ್ರಿನಯನಿ ಧಾರವಾಹಿಯಲ್ಲಿ ಜನಪ್ರಿಯರಾಗಿದ್ದರು. ಕನ್ನಡದ ʻರೋಬೊ ಫ್ಯಾಮಿಲಿʼ ಮೂಲಕ ಕಿರುತೆರೆಗೆ ಎಂಟ್ರಿಕೊಟ್ಟಿದ್ದ ಪವಿತ್ರ ಮೂಲತಃ ಮಂಡ್ಯ ತಾಲೂಕಿನ ಹನಕೆರೆಯವರು. ನಟಿ ರೋಬೊ ಫ್ಯಾಮಿಲಿ, ಜೋಕಾಲಿ, ನೀಲಿ, ರಾಧಾರಮಣ ಧಾರವಾಹಿಯಲ್ಲಿ ನಟಿಸಿ ಮನೆಮಾತಾಗಿದ್ದರು. ಚಂದ್ರಕಾಂತ್‌ ಕೂಡ ನಟರಾಗಿದ್ದರು. ಇಬ್ಬರೂ ಪರಸ್ಪರ ಪ್ರೀತಿಸುತ್ತಿದ್ದು, ಮದುವೆಯಾಗಲು ನಿಶ್ಚಯಿಸಿದ್ದರು ಎಂದು ವರದಿಯಾಗಿತ್ತು. ಆದರೆ, ಒಂದೇ ವಾರದಲ್ಲಿ ಇಬ್ಬರೂ ದುರಂತ ಸಾವು ಕಂಡಿದ್ದಾರೆ.

Continue Reading

ಕಿರುತೆರೆ

Gurucharan Singh: ಕಾಣೆಯಾಗಿದ್ದ ʻತಾರಕ್ ಮೆಹ್ತಾ ಕಾ ಉಲ್ಟಾ ಚಶ್ಮಾʼ ಖ್ಯಾತಿಯ ನಟ ಮತ್ತೆ ಮನೆಗೆ ವಾಪಸ್‌!

Gurucharan Singh: ವರದಿಯ ಪ್ರಕಾರ, ಗುರುಚರಣ್ ವಿಚಾರಣೆಯ ವೇಳೆ ಪೊಲೀಸ್ ಅಧಿಕಾರಿಗಳಿಗೆ“ ಲೌಕಿಕ ಜೀವನವನ್ನು ತೊರೆದು ಧಾರ್ಮಿಕ ಪ್ರಯಾಣದಲ್ಲಿದ್ದೇನೆ” ಎಂದು ಹೇಳಿದ್ದಾನೆ. ಕಳೆದ ಕೆಲವು ದಿನಗಳಲ್ಲಿ, ನಟ ಅಮೃತಸರ ಮತ್ತು ಲುಧಿಯಾನ ಸೇರಿದಂತೆ ಅನೇಕ ನಗರಗಳಿಗೆ ಭೇಟಿ ನೀಡಿದ್ದರು. ಆದರೆ ನಂತರ ಅವರು ಮನೆಗೆ ಮರಳಬೇಕೆಂದು ಅರಿತುಕೊಂಡರು ಎಂದು ಪೊಲೀಸರು ತಿಳಿಸಿದ್ದಾರೆ.

VISTARANEWS.COM


on

Gurucharan Singh returns home after almost a month
Koo

ಬೆಂಗಳೂರು: ಏಪ್ರಿಲ್ 22 ರಿಂದ ನಾಪತ್ತೆಯಾಗಿದ್ದ   ʻತಾರಕ್ ಮೆಹ್ತಾ ಕಾ ಉಲ್ಟಾ ಚಶ್ಮಾʼ (Taarak Mehta Ka Ooltah Chashmah) ಧಾರವಾಹಿ ನಟ ಗುರುಚರಣ್ ಸಿಂಗ್ (Gurucharan Singh) ಮೇ.17ರಂದು ಮನೆಗೆ ಮರಳಿದ್ದಾರೆ. ಪೊಲೀಸರ ಪ್ರಕಾರ, ಸಿಂಗ್ ವಿಚಾರಣೆಯ ಸಮಯದಲ್ಲಿ ತನ್ನ ಲೌಕಿಕ ಜೀವನವನ್ನು ತೊರೆದು ಧಾರ್ಮಿಕ ಪ್ರಯಾಣದಲ್ಲಿದ್ದೇನೆ ಎಂದು ಅಧಿಕಾರಿಗಳಿಗೆ ತಿಳಿಸಿದ್ದಾರೆ.

ವರದಿಯ ಪ್ರಕಾರ, ಗುರುಚರಣ್ ವಿಚಾರಣೆಯ ವೇಳೆ ಪೊಲೀಸ್ ಅಧಿಕಾರಿಗಳಿಗೆ“ ಲೌಕಿಕ ಜೀವನವನ್ನು ತೊರೆದು ಧಾರ್ಮಿಕ ಪ್ರಯಾಣದಲ್ಲಿದ್ದೇನೆ” ಎಂದು ಹೇಳಿದ್ದಾರೆ. ಕಳೆದ ಕೆಲವು ದಿನಗಳಲ್ಲಿ, ನಟ ಅಮೃತಸರ ಮತ್ತು ಲುಧಿಯಾನ ಸೇರಿದಂತೆ ಅನೇಕ ನಗರಗಳಿಗೆ ಭೇಟಿ ನೀಡಿದ್ದರು. ಆದರೆ ನಂತರ ಅವರು ಮನೆಗೆ ಮರಳಬೇಕೆಂದು ಅರಿತುಕೊಂಡರು ಎಂದು ಪೊಲೀಸರು ತಿಳಿಸಿದ್ದಾರೆ. ಏಪ್ರಿಲ್ 22 ರಂದು ನಟ ದೆಹಲಿಯಿಂದ ಮುಂಬೈಗೆ ವಿಮಾನ ಹಿಡಿಯಬೇಕಿತ್ತು. ಆದರೆ ಅವರು ವಿಮಾನ ಹತ್ತಲಿಲ್ಲ ಮತ್ತು ಕಾಣೆಯಾಗಿದ್ದರು.

ಏಪ್ರಿಲ್ 22ರಂದು ರಾತ್ರಿ 8.30 ಕ್ಕೆ ಮಗ ಮುಂಬೈಗೆ ತೆರಳಿದ್ದ ಎಂದು ತಂದೆ ದೂರು ನೀಡಿದ್ದರು. ಪೊಲೀಸರ ಮಾಹಿತಿ ಪ್ರಕಾರ ʻʻಎಪ್ರಿಲ್ 22ರಂದು ಗುರುಚರಣ್ ಸಿಂಗ್ ಶೂಟಿಂಗ್ ಸೇರಿದಂತೆ ಇತರ ಕೆಲಸದ ನಿಮಿತ್ತ ದೆಹಲಿಯ ತಮ್ಮ ನಿವಾಸದಿಂದ ಮುಂಬೈಗೆ ತೆರಳಲು ವಿಮಾನ ನಿಲ್ದಾಕ್ಕೆ ತೆರಳಿದ್ದರು. ಗುರುಚರಣ್ ಸಿಂಗ್ ಬೆಳಗ್ಗೆ 8.30ಕ್ಕೆ ಮನೆಯಿಂದ ತೆರಳಿದ್ದರು. ಆದರೆ ಅವರು ಮುಂಬೈಗೆ ತಲುಪಿಲ್ಲ. ಬದಲಾಗಿ ಬೆಳಗ್ಗೆ 9.14ರ ಸುಮಾರಿಗೆ ಪಾಲಂʼನಲ್ಲಿ ನಟ ಕಂಡು ಬಂದರು ಎಂದು ಪೊಲೀಸರು ಮಾಹಿತಿ ನೀಡಿದ್ದರು.

ಇದನ್ನೂ ಓದಿ: Gurucharan Singh: ಎರಡು ವಾರ ಕಳೆದರೂ ಪತ್ತೆಯಾಗದ  ʻತಾರಕ್ ಮೆಹ್ತಾ ಕಾ ಉಲ್ಟಾ ಚಶ್ಮಾʼ ಖ್ಯಾತಿಯ ನಟ!

ಗುರುಚರಣ್ ಆಗಾಗ ಕ್ರೆಡಿಟ್ ಕಾರ್ಡ್‌ಗಳನ್ನು ಬಳಸುತ್ತಿದ್ದರು ಮತ್ತು ಹಣಕಾಸಿನ ಚಟುವಟಿಕೆಗಳಿಗಾಗಿ ಅನೇಕ ಬ್ಯಾಂಕ್ ಖಾತೆಗಳನ್ನು ಇಟ್ಟುಕೊಂಡಿದ್ದರು. ಈತ 10ಕ್ಕೂ ಹೆಚ್ಚು ಬ್ಯಾಂಕ್ ಖಾತೆಗಳನ್ನು ಬಳಿಸಿದ್ದ ಎಂದು ಪೊಲೀಸರು ಪತ್ತೆ ಮಾಡಿದ್ದರು.

ಕೆಲ ವರ್ಷಗಳ ಹಿಂದೆ ಗುರುಚರಣ್ ಸಿಂಗ್ ʻತಾರಕ್ ಮೆಹ್ತಾ ಕಾ ಉಲ್ಟಾ ಚಶ್ಮಾʼ ಧಾರವಾಹಿಯಿಂದ ಹೊರಬಂದಿದ್ದರು. ತಂದೆಯ ಅನಾರೋಗ್ಯ, ಕುಟುಂಬದ ನಿರ್ವಹಣೆ ಕಾರಣದಿಂದ ಸೀರಿಯಲ್‌ನಿಂದ ಹೊರಬಂದು ಕುಟುಂಬದ ಜತೆ ಹೆಚ್ಚಿನ ಸಮಯ ಕಳೆಯುತ್ತಿದ್ದರು. ʻತಾರಕ್ ಮೆಹ್ತಾ ಕಾ ಉಲ್ಟಾ ಚಶ್ಮಾʼ ಧಾರಾವಾಹಿ 2022 ಜುಲೈ 2ಕ್ಕೆ 3500 ಸಂಚಿಕೆಗಳನ್ನು ಕಂಡಿದೆ.

Continue Reading
Advertisement
lr Shivarame gowda prajwal revanna case
ಕ್ರೈಂ2 mins ago

Prajwal Revanna Case: ಮಾಜಿ ಸಂಸದ ಶಿವರಾಮೇಗೌಡ ಮನೆ ಮೇಲೆ ಮೊಟ್ಟೆ ದಾಳಿ

Triple Talaq
ದೇಶ4 mins ago

Triple Talaq: ವಾಟ್ಸ್‌ಆ್ಯಪ್‌ ವಾಯ್ಸ್‌ ಮೆಸೇಜ್‌ನಲ್ಲಿ ತ್ರಿವಳಿ ತಲಾಕ್ ನೀಡಿದ ಪತಿ; ದೂರು ದಾಖಲು

rave party electronic city
ಕ್ರೈಂ31 mins ago

Rave Party: ರೇವ್‌ ಪಾರ್ಟಿ ಮೇಲೆ ಪೊಲೀಸ್‌ ದಾಳಿ, ತೆಲುಗು ನಟಿ ಹೇಮಾ ಪತ್ತೆ; ನಟಿಯರನ್ನು ಕರೆಸಿಕೊಂಡು ಏನ್‌ ಮಾಡ್ತಿದ್ರು?

Lok Sabha Election 2024
ದೇಶ32 mins ago

Lok Sabha Election 2024: 5ನೇ ಹಂತದ ಮತದಾನ; 49 ಕ್ಷೇತ್ರಗಳಲ್ಲಿ ವೋಟಿಂಗ್ ಶುರು

Job Alert
ಉದ್ಯೋಗ58 mins ago

Job Alert: ನೈವೇಲಿ ಲಿಗ್ನೈಟ್ ಕಾರ್ಪೋರೇಷನ್‌ನಲ್ಲಿದೆ ಉದ್ಯೋಗಾವಕಾಶ; ಅರ್ಜಿ ಸಲ್ಲಿಕೆಗೆ ಇಂದು ಕೊನೆ ದಿನ

Lok Sabha Election
ದೇಶ2 hours ago

Lok Sabha Election: ಇಂದು 5ನೇ ಹಂತದ ಮತದಾನ; ರಾಹುಲ್‌ ಗಾಂಧಿ, ಸ್ಮೃತಿ ಸೇರಿ ಹಲವರ ಭವಿಷ್ಯ ನಿರ್ಧಾರ

Karnataka Weather Forecast
ಮಳೆ2 hours ago

Karnataka Weather : ವರ್ಷಾಘಾತಕ್ಕೆ ಜನ ಸುಸ್ತು; ಮಳೆಯಾಟಕ್ಕೆ ಬಿರುಗಾಳಿ ಸಾಥ್‌

Dina Bhavishya
ಭವಿಷ್ಯ3 hours ago

Dina Bhavishya : ಮಾನಸಿಕ ಒತ್ತಡದಿಂದ ಮುಕ್ತರಾಗುವಿರಿ; ಹೂಡಿಕೆ ವ್ಯವಹಾರವು ಹೆಚ್ಚು ಲಾಭ ತರುವುದು

Pralhad Joshi
ಕರ್ನಾಟಕ8 hours ago

Pralhad Joshi: ರಾಜ್ಯದಲ್ಲಿ ಹತ್ಯೆ, ಆತ್ಮಹತ್ಯೆಗಳೇ ಅಧಿಕ, ಅಭಿವೃದ್ಧಿ ಸಮಾಧಿ: ಪ್ರಲ್ಹಾದ್‌ ಜೋಶಿ ಟೀಕೆ

Ebrahim Raisi
ವಿದೇಶ8 hours ago

Ebrahim Raisi: ಪತನದ ಬಳಿಕ ಹೆಲಿಕಾಪ್ಟರ್‌ ನಾಪತ್ತೆ; ಇರಾನ್ ಅಧ್ಯಕ್ಷ ಇಬ್ರಾಹಿಂ ರೈಸಿ ಸಾವು?

Sharmitha Gowda in bikini
ಕಿರುತೆರೆ8 months ago

Geetha Serial Kannada: ನಿದ್ದೆ ಕದ್ದ ಚೋರಿ! ನಟಿ `ಭಾನುಮತಿ’ ಹಾಟ್‌ ಪೋಟೊಗಳಿಗೆ ಫ್ಯಾನ್ಸ್ ಫುಲ್ ಫಿದಾ

Kannada Serials
ಕಿರುತೆರೆ7 months ago

Kannada Serials TRP: 2ನೇ ಸ್ಥಾನದಲ್ಲಿ 2 ಧಾರಾವಾಹಿಗಳು; ಟಿಆರ್‌ಪಿ ರೇಸ್‌ನಲ್ಲಿಲ್ಲ ಭಾಗ್ಯಲಕ್ಷ್ಮೀ!

Bigg Boss- Saregamapa 20 average TRP
ಕಿರುತೆರೆ7 months ago

Kannada Serials TRP: ಏಳನೇ ಸ್ಥಾನಕ್ಕೆ ʻಅಮೃತಧಾರೆʼ ಕುಸಿತ; ಬಿಗ್‌ ಬಾಸ್‌-ಸರಿಗಮಪ ಟಿಆರ್‌ಪಿ ಎಷ್ಟು?

galipata neetu
ಕಿರುತೆರೆ6 months ago

Kanyadana Serial: ಕಿರುತೆರೆಗೆ ಮತ್ತೆ ಎಂಟ್ರಿ ಕೊಟ್ಟ ʻಗಾಳಿಪಟʼ ಖ್ಯಾತಿಯ ʻನೀತುʼ!

Kannada Serials
ಕಿರುತೆರೆ8 months ago

Kannada Serials TRP: ನಾಲ್ಕನೇ ಸ್ಥಾನಕ್ಕೆ ಕುಸಿತ ಕಂಡ ʻಸೀತಾ ರಾಮʼ; ಟಿಆರ್‌ಪಿ ರೇಸ್‌ಗೆ ʻಭಾಗ್ಯಲಕ್ಷ್ಮಿʼ ಬ್ಯಾಕ್‌!

Kannada Serials
ಕಿರುತೆರೆ8 months ago

Kannada Serials TRP: ಟಿಆರ್‌ಪಿಯಲ್ಲಿ ʻಭಾಗ್ಯಲಕ್ಷ್ಮೀʼ ಹವಾ; ʻಪುಟ್ಟಕ್ಕನ ಮಕ್ಕಳುʼ ಧಾರಾವಾಹಿಗೆ ಸಂಕಷ್ಟ!

Bigg Boss' dominates TRP; Sita Rama fell to the sixth position
ಕಿರುತೆರೆ7 months ago

Kannada Serials TRP: ಟಿಆರ್‌ಪಿಯಲ್ಲಿ ʻಬಿಗ್ ಬಾಸ್ʼದೇ ಮೇಲುಗೈ; 6ನೇ ಸ್ಥಾನಕ್ಕೆ ಕುಸಿದ ʻಸೀತಾ ರಾಮʼ

geetha serial Dhanush gowda engagement
ಕಿರುತೆರೆ5 months ago

Dhanush Gowda: ಗೀತಾ ಧಾರಾವಾಹಿ ನಟನ ನಿಶ್ಚಿತಾರ್ಥ; ಭವ್ಯಾಳ ಕಮೆಂಟ್‌ ಬಾಕ್ಸ್‌ ಆಫ್‌!

varun
ಕಿರುತೆರೆ6 months ago

Brindavana Serial: ʼಬೃಂದಾವನʼ ಧಾರಾವಾಹಿಯಲ್ಲಿ ದೊಡ್ಡ ಟ್ವಿಸ್ಟ್‌; ಪ್ರಮುಖ ಪಾತ್ರಧಾರಿಯೇ ಬದಲು

Kannada Serials
ಕಿರುತೆರೆ8 months ago

Kannada Serials TRP: ಟಿಆರ್‌ಪಿಯಲ್ಲಿ ಏರಿಕೆ ಕಂಡ ʻಅಮೃತಧಾರೆʼ; ʻಗಟ್ಟಿಮೇಳʼಕ್ಕೆ ನಾಲ್ಕನೇ ಸ್ಥಾನ!

Karnataka Rain
ಮಳೆ16 hours ago

Karnataka Rain : ಒಂದೇ ಮಳೆಗೆ ಹೊಳೆಯಂತಾದ ಬೆಂಗಳೂರು ರಸ್ತೆಗಳು! ಕಳಸದಲ್ಲೂ ಮುಂದುವರಿದ ಅಬ್ಬರ

Karnataka rain
ಮಳೆ17 hours ago

Karnataka Rain : ವಿಜಯನಗರದಲ್ಲಿ ಸಿಡಿಲಿಗೆ ಜಾನುವಾರು ಬಲಿ; ಬೆಂಗಳೂರು ಸೇರಿ ಹಲವೆಡೆ ಭಾರಿ ಮಳೆ

Karnataka Rain
ಮಳೆ18 hours ago

Karnataka Rain: ಧಾರಾಕಾರ ಮಳೆಗೆ ಕಾಂಪೌಂಡ್ ಕುಸಿದು 4 ಬೈಕ್‌ಗಳು ಜಖಂ; ಮದುವೆ ಮಂಟಪಕ್ಕೆ ನುಗ್ಗಿದ ನೀರು‌

Prajwal Revanna Case JDS calls CD Shivakumar pen drive gang
ರಾಜಕೀಯ2 days ago

Prajwal Revanna Case: CD ಶಿವಕುಮಾರ್ ಪೆನ್ ಡ್ರೈವ್ ಗ್ಯಾಂಗ್ ಎಂದ ಕುಟುಕಿದ ಜೆಡಿಎಸ್‌!

Karnataka weather Forecast
ಮಳೆ3 days ago

Karnataka Weather : ಮೈಸೂರು, ಮಂಡ್ಯ ಸೇರಿ ಈ 7 ಜಿಲ್ಲೆಗಳಲ್ಲಿ ವ್ಯಾಪಕ ಮಳೆ ಸಂಭವ

Dina Bhavishya
ಭವಿಷ್ಯ3 days ago

Dina Bhavishya : ಈ ರಾಶಿಯ ಪ್ರೇಮಿಗಳಿಗೆ ಮನೆಯಿಂದ ಸಿಗುತ್ತೆ ಗ್ರೀನ್‌ ಸಿಗ್ನಲ್‌

Karnataka Weather Forecast
ಮಳೆ4 days ago

Karnataka Weather : ಭಾರಿ ಮಳೆಗೆ ಕೊಟ್ಟೂರು ಬಸ್ ಸ್ಟ್ಯಾಂಡ್‌ ಜಲಾವೃತ; ‌ ತಾಯಿ-ಮಗ ಗ್ರೇಟ್‌ ಎಸ್ಕೇಪ್‌

Drowned in water
ಹಾಸನ4 days ago

Drowned in water : ಕೆರೆಯಲ್ಲಿ ಈಜಲು ಹೋದ ನಾಲ್ವರು ನೀರುಪಾಲು; ಓರ್ವ ಬಾಲಕ ಪಾರು

Suspicious Case
ಬೆಂಗಳೂರು4 days ago

Suspicious Case : ಬಾತ್‌ ರೂಂನಲ್ಲಿತ್ತು ಕಾಲೇಜು ಹುಡುಗಿ ಡೆಡ್‌ ಬಾಡಿ; ಕುತ್ತಿಗೆ ಕೊಯ್ದು ಸಾಯಿಸಿದವರು ಯಾರು?

Prajwal Revanna Case
ಕರ್ನಾಟಕ5 days ago

Prajwal Revanna Case: ಪ್ರಜ್ವಲ್‌ ರೇವಣ್ಣ ಇಂದೇ ಜರ್ಮನಿಯಿಂದ ಭಾರತಕ್ಕೆ? ಎಸ್‌ಐಟಿ ಅಲರ್ಟ್‌

ಟ್ರೆಂಡಿಂಗ್‌