Kannada New Movie: ʻಬಹದ್ದೂರ್ʼ ಚೇತನ್ ಸಿನಿಮಾಗೆ ʻಗಟ್ಟಿಮೇಳ'ದ ನಾಯಕ! - Vistara News

South Cinema

Kannada New Movie: ʻಬಹದ್ದೂರ್ʼ ಚೇತನ್ ಸಿನಿಮಾಗೆ ʻಗಟ್ಟಿಮೇಳ’ದ ನಾಯಕ!

Kannada New Movie: ಬಹದ್ದೂರ್, ಭರ್ಜರಿ ಮೂಲಕ ಮೋಡಿ ಮಾಡಿದ್ದ ಹರಿಕೃಷ್ಣ ಹಾಗೂ ಚೇತನ್ (CHETHAN KUMAR P) ಜೋಡಿ ಮೂರನೇ ಬಾರಿಗೆ ಒಂದಾಗುತ್ತಿರುವುದು ಸಿನಿರಸಿಕರಿಗೆ ನಿರೀಕ್ಷೆ ಹೆಚ್ಚಿಸಿದೆ.

VISTARANEWS.COM


on

RAKKSH RAAM Chetan
ಮಹತ್ವದ, ಕುತೂಹಲಕರ ಸುದ್ದಿಗಾಗಿ ಫಾಲೊ ಮಾಡಿ
Koo

ಬೆಂಗಳೂರು: ಬಹದ್ದೂರ್, ಭರ್ಜರಿ, ಭರಾಟೆ ಹಾಗೂ ಜೇಮ್ಸ್ ಸಿನಿಮಾಗಳ ನಿರ್ದೇಶಕ ಚೇತನ್ ಕುಮಾರ್ ಹೊಸ ಸಿನಿಮಾ ಘೋಷಣೆ ಮಾಡಿದ್ದಾರೆ. ಆಗಸ್ಟ್‌ 25ರ ವರಮಹಾಲಕ್ಷ್ಮೀ ಹಬ್ಬದ ಪ್ರಯುಕ್ತ ಚಿತ್ರತಂಡ ಶೀರ್ಷಿಕೆ ರಿವೀಲ್ ಮಾಡಿದೆ. ʻಬರ್ಮʼ (BURMA Kannada New Movie) ಎಂಬ ವಿಭಿನ್ನ ಬಗೆಯ ಟೈಟಲ್ ಇರುವ ಸಿನಿಮಾಗೆ ಗಟ್ಟಿಮೇಳ ಧಾರಾವಾಹಿಯ ʻರಕ್ಷ್ ರಾಮ್ʼ (Rakksh Raam) ನಾಯಕ. ಸಂಸ್ಕೃತದಲ್ಲಿ ಬರ್ಮ ಅಂದರೆ ಬ್ರಹ್ಮ ವಾಸಿಸುವ ಜಾಗ ಎಂದರ್ಥ.

ʻಬರ್ಮʼ ಆ್ಯಕ್ಷನ್ ಮತ್ತು ಎಂಟರ್​ಟೈನ್​ನ್ಮೆಂಟ್​ ಸಿನಿಮಾವಾಗಿದ್ದು, ಪ್ಯಾನ್ ಇಂಡಿಯಾ ಮಟ್ಟದಲ್ಲಿ ಮೂಡಿ ಬರಲಿದೆ. ವಿ. ಹರಿಕೃಷ್ಣ ಈ ಸಂಗೀತ ನಿರ್ದೇಶನ ಮಾಡಲಿದ್ದಾರೆ. ಬಹದ್ದೂರ್, ಭರ್ಜರಿ ಸಿನಿಮಾದ ಮೂಲಕ ಮೋಡಿ ಮಾಡಿದ್ದ ಹರಿಕೃಷ್ಣ ಹಾಗೂ ಚೇತನ್ (CHETHAN KUMAR P) ಜೋಡಿ ಮೂರನೇ ಬಾರಿಗೆ ಒಂದಾಗುತ್ತಿರುವುದು ಸಿನಿರಸಿಕರಇಗೆ ನಿರೀಕ್ಷೆ ಹೆಚ್ಚಿಸಿದೆ.

ಬರ್ಮ ಸಿನಿಮಾ ಅನೌನ್ಸ್ ದಿನವೇ ಆಡಿಯೊ ರೈಟ್ಸ್ ಭಾರೀ ಮೊತ್ತಕ್ಕೆ ಮಾರಾಟವಾಗಿದೆ ಎಂದು ಚಿತ್ರತಂಡ ಮಾಹಿತಿ ಹಂಚಿಕೊಂಡಿದೆ. ಈಗಾಗಲೇ ರಕ್ಷ್ ರಾಮ್ ಕಿರುತೆರೆಯಲ್ಲಿ ಖ್ಯಾತಿ ಗಳಿಸಿದ್ದು, ಬರ್ಮ ಮೂಲಕ ಪ್ಯಾನ್ ಇಂಡಿಯಾ ಅದೃಷ್ಟ ಪರೀಕ್ಷೆಗಿಳಿದಿದ್ದಾರೆ. ನಿರ್ದೇಶಕ ಚೇತನ್ ಕುಮಾರ್ ಪ್ರತಿ ಸಿನಿಮಾದಲ್ಲೊಂದು ಹೊಸತನ ಹೊತ್ತು ತರುತ್ತಾರೆ. ಅದೇ ನಿರೀಕ್ಷೆ ಬರ್ಮ ಸಿನಿಮಾ ಮೇಲೆಯೂ ಇದೆ.

ಸೆಪ್ಟೆಂಬರ್‌ನಿಂದ ಶೂಟಿಂಗ್ ಶುರುವಾಗಲಿದೆ ಎಂದು ಚಿತ್ರತಂಡ ಹೇಳಿಕೊಂಡಿದೆ. ಇನ್ನುಳಿದ ತಾರಾ ಬಳಗ ಹಾಗೂ ತಾಂತ್ರಿಕ ವರ್ಗದ ಮಾಹಿತಿಯನ್ನು ಒಂದೊಂದಾಗಿ ಚಿತ್ರತಂಡ ನೀಡಲಿದೆ.

ಇದನ್ನೂ ಓದಿ: Kannada Serials TRP: ʻಗಟ್ಟಿಮೇಳʼ ಹಿಂದಿಕ್ಕಿದ ʻಸೀತಾ ರಾಮʼ; ಹೊಸ ಧಾರಾವಾಹಿಗಳದ್ದೇ ಕಾರುಬಾರು!

ರಕ್ಷ್ ರಾಮ್ ಯಾರು?

ʻಗಟ್ಟಿಮೇಳ’ ಸೀರಿಯಲ್‌ನಲ್ಲಿ ರಕ್ಷ್ ರಾಮ್‌ ಅವರು ವೇದಾಂತ್ ವಸಿಷ್ಠ ಪಾತ್ರದಲ್ಲಿ ನಟಿಸುತ್ತಿದ್ದಾರೆ. ‘ಪುಟ್ಟಗೌರಿ ಮದುವೆ’ ಸೀರಿಯಲ್ ಮೂಲಕ ಅವರು ಸಾಕಷ್ಟು ಖ್ಯಾತಿ ಪಡೆದಿದ್ದರು. ಕೆಲ ದಿನಗಳ ಕಾಲ ಧಾರಾವಾಹಿಯಿಂದ ಬ್ರೇಕ್ ಪಡೆದುಕೊಂಡಿದ್ದ ರಕ್ಷ್ ಗಟ್ಟಿಮೇಳ ಸೀರಿಯಲ್ ತಂಡ ಸೇರಿಕೊಂಡಿದ್ದಾರೆ.ಈ ಧಾರಾವಾಹಿಯಲ್ಲಿ ರಕ್ಷ್‌ ಮತ್ತು ನಿಶಾ ರವಿಕೃಷ್ಣನ್ ಅವರ ಜೋಡಿ ನೋಡುಗರ ಮನಸ್ಸು ಗೆದ್ದಿದೆ.

ಲಾಕ್‌ಡೌನ್ ಘೋಷಣೆಯಾಗುವ ಮುನ್ನ ರಕ್ಷ್ ರಾಮ್‌ ಅವರ ಅಭಿನಯದ ‘ನರಗುಂದ ಬಂಡಾಯ’ ಸಿನಿಮಾ ರಿಲೀಸ್ ಆಗಿತ್ತು. ರಕ್ಷ್ ಕೈಯಲ್ಲಿ ಇನ್ನು ಕೆಲ ಸಿನಿಮಾಗಳಿವೆ.

ಕ್ಷಣ ಕ್ಷಣದ ಮಾಹಿತಿಗಾಗಿ Vistara News FaceBook ಪೇಜ್ ಫಾಲೋ ಮಾಡಿ
ಮಹತ್ವದ ಮಾಹಿತಿಗಾಗಿ ವಿಸ್ತಾರ ನ್ಯೂಸ್ ಆ್ಯಪ್ ಉಚಿತವಾಗಿ ಡೌನ್ ಲೋಡ್ ಮಾಡಿಕೊಳ್ಳಿ: Andriod App | IOS App
Continue Reading
Click to comment

Leave a Reply

Your email address will not be published. Required fields are marked *

ಸ್ಯಾಂಡಲ್ ವುಡ್

Shiva Rajkumar: ಸಾಯಿಕುಮಾರ್‌ಗೆ ಶಿವಣ್ಣ ಡ್ಯೂಪ್ ಆಗಿದ್ದ ಸಿನಿಮಾ ಯಾವುದು? ಆ ದೃಶ್ಯಕ್ಕೆ ಅಭಿಮಾನಿಗಳಿಂದ ಶಿಳ್ಳೆ, ಚಪ್ಪಾಳೆ!

Shiva Rajkumar: ಕನ್ನಡದಲ್ಲಿ ಓಂ ಪ್ರಕಾಶ್ ರಾವ್ ನಿರ್ದೇಶನದ ‘AK-47’ ಸಿನಿಮಾ ಹಿಟ್ ಆಗಿತ್ತು. ಶಿವರಾಜ್‌ಕುಮಾರ್ ಹೀರೊ ಆಗಿ ನಟಿಸಿದ್ದ ಚಿತ್ರಕ್ಕೆ ಕೋಟಿ ರಾಮು ಬಂಡವಾಳ ಹೂಡಿದ್ದರು. ವಿಶೇಷ ಅಂದ್ರೆ ಈ ಚಿತ್ರವನ್ನು ಏಕಕಾಲಕ್ಕೆ ಕನ್ನಡ ಹಾಗೂ ತೆಲುಗಿನಲ್ಲಿ ತೆರೆಗೆ ತರಲಾಗಿತ್ತು. ‘AK-47’ ಕನ್ನಡ ಚಿತ್ರದಲ್ಲಿ ಶಿವಣ್ಣ ಹೀರೊ ಆಗಿ ನಟಿಸಿದರೆ ತೆಲುಗಿನಲ್ಲಿ ಸಾಯಿಕುಮಾರ್ ಮಿಂಚಿದ್ದರು.

VISTARANEWS.COM


on

Shiva Rajkumar played the dupe for saikumar in film
Koo

ಬೆಂಗಳೂರು: ಸಿನಿಮಾಗಳಲ್ಲಿ ಡ್ಯೂಪ್ ಹಾಕುವುದು ಸರ್ವೇ ಸಾಮಾನ್ಯ. ತೆಲುಗು ನಟ ಸಾಯಿಕುಮಾರ್‌ಗೆ (Shiva Rajkumar) ಕನ್ನಡ ನಟ ಶಿವರಾಜ್‌ಕುಮಾರ್ ಒಂದು ಸಿನಿಮಾದಲ್ಲಿ ಡ್ಯೂಪ್ ಹಾಕಿದ್ದರು. ಇತ್ತೀಚೆಗೆ ಸಂದರ್ಶನವೊಂದರಲ್ಲಿ : ಸಾಯಿಕುಮಾರ್‌ ಈ ವಿಚಾರವನ್ನು ಬಹಿರಂಗಪಡಿಸಿದ್ದರು.ಕನ್ನಡದಲ್ಲಿ ಓಂ ಪ್ರಕಾಶ್ ರಾವ್ ನಿರ್ದೇಶನದ ‘AK-47’ ಸಿನಿಮಾ ಹಿಟ್ ಆಗಿತ್ತು. ಶಿವರಾಜ್‌ಕುಮಾರ್ ಹೀರೊ ಆಗಿ ನಟಿಸಿದ್ದ ಚಿತ್ರಕ್ಕೆ ಕೋಟಿ ರಾಮು ಬಂಡವಾಳ ಹೂಡಿದ್ದರು. ವಿಶೇಷ ಅಂದ್ರೆ ಈ ಚಿತ್ರವನ್ನು ಏಕಕಾಲಕ್ಕೆ ಕನ್ನಡ ಹಾಗೂ ತೆಲುಗಿನಲ್ಲಿ ತೆರೆಗೆ ತರಲಾಗಿತ್ತು. ‘AK-47’ ಕನ್ನಡ ಚಿತ್ರದಲ್ಲಿ ಶಿವಣ್ಣ ಹೀರೊ ಆಗಿ ನಟಿಸಿದರೆ ತೆಲುಗಿನಲ್ಲಿ ಸಾಯಿಕುಮಾರ್ ಮಿಂಚಿದ್ದರು.

ಈ ಬಗ್ಗೆ ನಟ ಸಾಯಿ ಕುಮಾರ್‌ ಮಾತನಾಡಿ ʻʻAK 47 ಸಿನಿಮಾದ ಮಾಡುವಾಗ ಡಬಲ್‌ ವರ್ಷನ್‌ ಮಾಡಬೇಕು ಎಂದು ರಾಮು ಅವರ ಪ್ಲ್ಯಾನ್‌ ಆಗಿತ್ತು. ಲಾಕ್‌ಅಪ್‌ಡೆತ್‌ ಸಿನಿಮಾ ಕೊಟ್ಟಿದ್ದು ಓಂ ಪ್ರಕಾಶ್‌. ರಾಮು ಅವರೇ ಪ್ರೊಡ್ಯೂಸರ್‌ ಆಗಿದ್ದರು. ಆ ಸಿನಿಮಾ ಕನ್ನಡವನ್ನು ಶಿವಣ್ಣ ಮಾಡ್ತಾರೆ, ತೆಲುಗು ನೀವು ಮಾಡಿ ಅಂದರು. ಖಂಡಿತ ಮಾಡ್ತೀನಿ ಎಂದೆ. ಬಾಂಬೆಯಲ್ಲಿ ಮೇಜರ್‌ ಎಪಿಸೋಡ್‌ ಇತ್ತು. ಅವರದ್ದು ನಂದೂ ಸೇಮ್‌ ಕಾಸ್ಟ್ಯೂಮ್‌ ಇತ್ತು. ಆದರೆ ನಾನು ಶೂಟ್‌ ಮಾಡುವಾಗ ಗಾಯಕ್ಕೆ ಒಳಗಾದೆ. ನನಗೆ ಏಟು ಬಿತ್ತು. ಆಸ್ಪತ್ರೆಗೆ ಕರೆದುಕೊಂಡರು. ತಿರಗಾ ಬಂದು ಮತ್ತೆ ಶೂಟಿಂಗ್‌ ಬಂದೆವು. ಟೆಲಿ ಶಾಟ್‌ ಒಂದು ಇತ್ತು. ಬಳಿಕ ನನ್ನ ಶಾಟ್‌ ಎಲ್ಲ ಅವರೇ ಮಾಡಿದ್ರು. ಇನ್ನು ಫೈಟ್ ಮಾಡುವಾಗ ಅಪ್ ಶಾಟ್ ಹೊಡೆಯಬೇಕಿತ್ತು. ಶಿವಣ್ಣ ತುಂಬಾ ಚೆನ್ನಾಗಿ ಮಾಡಿದರು. ನನಗೂ ಮಾಡೋಕೆ ಹೇಳ್ತಾರೆ ಅಂತ ನನಗೆ ಭಯವಾಗಿತ್ತು. ನನ್ನನ್ನು ಕರೆದು ಮಾಡಿ ಎಂದಾಗ ಆಗಲ್ಲ ಎಂದೆ. ಇಲ್ಲ ಮಾಡಲೇಬೇಕು ಎಂದ್ರು. ಶಿವಣ್ಣ ಬಂದ್ರು. ಸೇಮ್ ಡ್ರೆಸ್‌ನಲ್ಲಿ ಇದ್ರು. ಸ್ವಲ್ಪ ಆಂಗಲ್ ಚೇಂಜ್ ಮಾಡ್ಕೊಳ್ಳಿ ಸಾಯಿಗೆ ನಾನೇ ಡ್ಯೂಪ್ ಮಾಡ್ತೀನಿ ಅಂತ ಶಿವಣ್ಣ ಮಾಡಿಬಿಟ್ರು. ಹೈದರಾಬಾದ್ ಸಂಧ್ಯಾ ಚಿತ್ರಮಂದಿರದಲ್ಲಿ ಸಿನಿಮಾ ಬಿಡುಗಡೆ ಆಗಿತ್ತು. ನಾನು ಪ್ರೇಕ್ಷಕರ ಜೊತೆ ಸಿನಿಮಾ ವೀಕ್ಷಿಸಿದೆ. ಸಿನಿಮಾ ಎಲ್ಲಾ ಚೆನ್ನಾಗಿತ್ತು. ಆ ಶಾಟ್‌ಗೆ ಪ್ರೇಕ್ಷಕರು ಚಪ್ಪಾಳೆ ತಟ್ಟಿದ್ದರು. ಆದರೆ ಜನ ಅಂದುಕೊಂಡಿದ್ದು ನಾನು ಅಂತ. ಆ ಕ್ಕ್ರೆಡಿಟ್‌ ಶಿವಣ್ಣ ಅವರಿಗೆ ಸೇರಬೇಕು ಎಂದರು.

ಇದನ್ನೂ ಓದಿ: Ajith Kumar: ಪ್ರಶಾಂತ್ ನೀಲ್- ಅಜಿತ್ ಭೇಟಿಯಾಗಿದ್ದು ನಿಜ; ಸಿನಿಮಾ ಬಗ್ಗೆ ಮ್ಯಾನೇಜರ್ ಹೇಳಿದ್ದೇನು?

ನಟ ಸಾಯಿಕುಮಾರ್ ಅವರನ್ನು ಕನ್ನಡ ಸಿನಿರಸಿಕರು ಡೈಲಾಗ್ ಕಿಂಗ್ ಎಂದೇ ಹೇಳುತ್ತಾರೆ. ಕನ್ನಡದ ‘ಲಾಕಪ್‌ ಡೆತ್’ ಸಿನಿಮಾ ಮೂಲಕ ಅವರಿಗೆ ದೊಡ್ಡ ಬ್ರೇಕ್ ಸಿಕ್ಕಿತ್ತು. ‘ಪೊಲೀಸ್ ಸ್ಟೋರಿ’ ಸಿನಿಮಾ ದಾಖಲೆ ಬರೆದಿತ್ತು. ಮುಂದೆ ‘ಮುದ್ದಿನ ಕಣ್ಮಣಿ’, ‘ಅಗ್ನಿ ಐಪಿಎಸ್’, ‘ಪೊಲೀಸ್ ಸ್ಟೋರಿ-2’, ‘ಕಲ್ಪನಾ’ ಸೇರಿ ಹಲವು ಸಿನಿಮಾಗಳಲ್ಲಿ ನಟಿಸಿದರು. ಇದೀಗ ‘ಸತ್ಯ ಸನ್ ಆಫ್ ಹರಿಶ್ಚಂದ್ರ’ ಎನ್ನುವ ಚಿತ್ರದಲ್ಲಿ ನಿರೂಪ್ ಭಂಡಾರಿ ಜೊತೆ ನಟಿಸುತ್ತಿದ್ದಾರೆ.

Continue Reading

South Cinema

Rashmika Mandanna: ದೇವರ ನಾಡಲ್ಲಿ ರಶ್ಮಿಕಾ ಬೋಲ್ಡ್‌ ಡ್ಯಾನ್ಸ್‌; ನಟಿಯನ್ನು ನೋಡಲು ಮುಗಿಬಿದ್ದ ಫ್ಯಾನ್ಸ್!

Rashmika Mandanna: ಕರುನಾಗಪಲ್ಲಿಯಲ್ಲಿ ವೆಡ್ಸ್ ಇಂಡಿಯಾ ಶಾಪಿಂಗ್ ಮಾಲ್ ಉದ್ಘಾಟನಾ ಸಮಾರಂಭಕ್ಕೆ  ಗುರುವಾರ ಬೆಳಗ್ಗೆ 9 ಗಂಟೆಗೆ ಕೊಚ್ಚಿ ವಿಮಾನ ನಿಲ್ದಾಣಕ್ಕೆ ರಶ್ಮಿಕಾ ಆಗಮಿಸುತ್ತಿದ್ದಂತೆ,  ಅವರನ್ನು ಬರಮಾಡಿಕೊಳ್ಳಲು ಸಾವಿರಾರು ಫ್ಯಾನ್ಸ್‌ ಒಂದೆಡೆ ಸೇರಿದ್ದರು. 

VISTARANEWS.COM


on

Rashmika Mandanna attends an event in Kerala receives love
Koo

ಬೆಂಗಳೂರು: ನ್ಯಾಶನಲ್‌ ಕ್ರಶ್‌ ರಶ್ಮಿಕಾ ಮಂದಣ್ಣ (Rashmika Mandanna) ಅಪಾರ ಅಭಿಮಾನಿಗಳನ್ನು ಹೊಂದಿದ್ದಾರೆ. ಎರಡು ವರ್ಷಗಳ ಬಳಿಕ ದೇವರ ನಾಡು ಕೇರಳಕ್ಕೆ ಆಗಮಿಸಿದ ನ್ಯಾಶನಲ್ ಕ್ರಶ್ ರಶ್ಮಿಕಾ ಮಂದಣ್ಣ ಅವರಿಗೆ ಕೇರಳದಲ್ಲಿ ಅದ್ಧೂರಿ ಸ್ವಾಗತ ಸಿಕ್ಕಿದೆ. 2000 ಕ್ಕೂ ಹೆಚ್ಚು ಜನ ನಟಿಯನ್ನು ನೋಡಲು ಮುಗಿ ಬಿದ್ದಿದ್ದರು. ಕರುನಾಗಪಲ್ಲಿಯಲ್ಲಿ ವೆಡ್ಸ್ ಇಂಡಿಯಾ ಶಾಪಿಂಗ್ ಮಾಲ್ ಉದ್ಘಾಟನಾ ಸಮಾರಂಭಕ್ಕೆ  ಗುರುವಾರ ಬೆಳಗ್ಗೆ 9 ಗಂಟೆಗೆ ಕೊಚ್ಚಿ ವಿಮಾನ ನಿಲ್ದಾಣಕ್ಕೆ ರಶ್ಮಿಕಾ ಆಗಮಿಸುತ್ತಿದ್ದಂತೆ,  ಅವರನ್ನು ಬರಮಾಡಿಕೊಳ್ಳಲು ಸಾವಿರಾರು ಫ್ಯಾನ್ಸ್‌ ಒಂದೆಡೆ ಸೇರಿದ್ದರು. 

ಇದೀಗ ರಶ್ಮಿಕಾ ಫೋಟೊ ಶೇರ್‌ ಮಾಡಿ “ನಾನು ನಿಮ್ಮೆಲ್ಲರನ್ನು ಭೇಟಿಯಾದಾಗ ನನ್ನ ಹೃದಯ ತುಂಬಿ ಬಂತು. ಧನ್ಯವಾದಗಳು ಕರುನಾಗಪಲ್ಲಿ. ಎಂದು ಬರೆದುಕೊಂಡಿದ್ದಾರೆ. ರಶ್ಮಿಕಾ ಮಂದಣ್ಣ ದಕ್ಷಿಣದ ಅತ್ಯಂತ ಪ್ರತಿಭಾವಂತ ನಟಿಯರಲ್ಲಿ ಒಬ್ಬರು. ಹೀಗಾಗಿ ಅಭಿಮಾನಿಗಳು ಅವರನ್ನು ಪ್ರೀತಿಯಿಂದ ನ್ಯಾಷನಲ್ ಕ್ರಶ್ ಎಂದು ಕರೆಯುತ್ತಾರೆ. ನಿನ್ನೆ (ಜು. 25) ಕೇರಳದ ಕೊಲ್ಲಂನಲ್ಲಿ ನಡೆದ ಕಾರ್ಯಕ್ರಮವೊಂದರಲ್ಲಿ ರಶ್ಮಿಕಾ ಮಂದಣ್ಣ ಭಾಗವಹಿಸಿದ್ದರು, ಆದರೆ ನಟಿಯನ್ನು ವೀಕ್ಷಿಸಲು 2000 ಕ್ಕೂ ಹೆಚ್ಚು ಅಭಿಮಾನಿಗಳು ಜಮಾಯಿಸಿದರು. ನಟಿಯನ್ನು ಸ್ವಾಗತಿಸಲು ಕಾರ್ಯಕ್ರಮದ ಸಮಯದಲ್ಲಿ ರಶ್ಮಿಕಾ ಮಂದಣ್ಣ ನಟಿಸಿರುವ ಸಿನಿಮಾಗಳ ಹಲವಾರು ಹಾಡುಗಳನ್ನು ಪ್ರಸಾರ ಮಾಡಲಾಯಿತು. ಕಾರ್ಯಕ್ರಮದಲ್ಲಿ ಹಸಿರು ಸೀರೆಯಲ್ಲಿ ಕಾಣಿಸಿಕೊಂಡರು ರಶ್ಮಿಕಾ.

ಇದನ್ನೂ ಓದಿ: Ajith Kumar: ಪ್ರಶಾಂತ್ ನೀಲ್- ಅಜಿತ್ ಭೇಟಿಯಾಗಿದ್ದು ನಿಜ; ಸಿನಿಮಾ ಬಗ್ಗೆ ಮ್ಯಾನೇಜರ್ ಹೇಳಿದ್ದೇನು?

ʻರಂಜಿತಮೆ’ ಹಾಡು ಪ್ಲೇ ಆಗುತ್ತಿದ್ದಂತೆ ನೃತ್ಯ ಮಾಡಲು ಪ್ರಾರಂಭಿಸಿದರು ನಟಿ. ನೆರೆದಿದ್ದ ಸಾವಿರಾರು ಅಭಿಮಾನಿಗಳಿಗೆ ತಮ್ಮ ಎಂದಿನ ಸ್ಟೈಲ್‌ನಲ್ಲಿ ಫ್ಲೈಯಿಂಗ್‌ ಕಿಸ್‌ ನೀಡಿದ್ದಾರೆ ನಟಿ. ಇನ್ನು ಸಿನಿಮಾ ವಿಚಾರಕ್ಕೆ ಬಂದರೆ, ಸಲ್ಮಾನ್‌ ಖಾನ್‌ ಅವರ ಸಿಕಂದರ್‌ ಚಿತ್ರದಲ್ಲಿ ರಶ್ಮಿಕಾ ನಟಿಸುತ್ತಿದ್ದಾರೆ. ಅದೇ ರೀತಿ ಛಾವಾ ಸಿನಿಮಾಗೆ ರಶ್ನಿಕಾ ನಾಯಕಿ. ಪುಷ್ಪ ಸಿನಿಮಾಗೂ ರಶ್ಮಿಕಾ ನಾಯಕಿ.  ಈಗ ಒಂದೇ ದಿನ ರಶ್ಮಿಕಾ ಅವರ ಈ ಎರಡು ಸಿನಿಮಾಗಳು ರಿಲೀಸ್ ಆಗೋ ಸಾಧ್ಯತೆ ಇದೆ ಎಂದು ವರದಿಯಾಗಿದೆ.

‘ಪುಷ್ಪ 2’ ಸಿನಿಮಾ ಡಿಸೆಂಬರ್ 6ರಂದು ರಿಲೀಸ್ ಮಾಡೋದಾಗಿ ತಂಡದವರು ಘೋಷಣೆ ಮಾಡಿದ್ದಾರೆ. ಅದೇ ರೀತಿ ರಶ್ಮಿಕಾ ನಟನೆಯ ‘ಛವಾ’ ಕೂಡ ಡಿಸೆಂಬರ್ 6ಕ್ಕೆ ಬಿಡುಗಡೆ ಕಾಣಲಿದೆ ಎಂದು ಹೇಳಲಾಗುತ್ತಿದೆ. ‘ಪುಷ್ಪ 2’ ಘೋಷಣೆ ಆದ ಬಳಿಕ ಈ ಚಿತ್ರದ ರಿಲೀಸ್ ದಿನಾಂಕ ಮುಂದಕ್ಕೆ ಹೋಗಬಹುದು ಎಂದು ಅನೇಕರು ಭಾವಿಸಿದ್ದರು. ಆದರೆ ಆ ರೀತಿ ಆಗಿಲ್ಲ. ಈ ಚಿತ್ರ ಕೂಡ ಅಂದುಕೊಂಡಂತೆ ಡಿಸೆಂಬರ್ 6ರಂದು ರಿಲೀಸ್ ಆಗಲಿದೆ ಎಂದು ಹೇಳಲಾಗುತ್ತಿದೆ.

Continue Reading

ಕಾಲಿವುಡ್

Ajith Kumar: ಪ್ರಶಾಂತ್ ನೀಲ್- ಅಜಿತ್ ಭೇಟಿಯಾಗಿದ್ದು ನಿಜ; ಸಿನಿಮಾ ಬಗ್ಗೆ ಮ್ಯಾನೇಜರ್ ಹೇಳಿದ್ದೇನು?

Ajith Kumar: ಇವರಿಬ್ಬರ ಕಾಂಬಿನೇಷನ್‌ನಲ್ಲಿ ಒಂದಲ್ಲ ಎರಡು ಸಿನಿಮಾ ಬರುತ್ತದೆ. ಇತ್ತೀಚೆಗೆ ಇಬ್ಬರೂ ಭೇಟಿ ಮಾಡಿ ಮಾತುಕತೆ ನಡೆಸಿದ್ದಾರೆ ಎನ್ನುವ ಗುಸುಗುಸು ಶುರುವಾಗಿತ್ತು.. ಈ ಬಗ್ಗೆ ನಟ ಅಜಿತ್ ಮ್ಯಾನೇಜರ್ ಸುರೇಶ್ ಚಂದ್ರ ಪ್ರತಿಕ್ರಿಯಿಸಿದ್ದಾರೆ.

VISTARANEWS.COM


on

Ajith Kumar Neel not collaborating for a film
Koo

ಬೆಂಗಳೂರು: ನಿರ್ದೇಶಕ ಪ್ರಶಾಂತ್ ನೀಲ್ ಜತೆ ತಮಿಳು ನಟ ಅಜಿತ್ (Ajith Kumar) ಸಿನಿಮಾ ಮಾಡುತ್ತಿದ್ದಾರೆ ಎಂಬ ಸುದ್ದಿ ವೈರಲ್‌ ಆಗಿತ್ತು. ಈಗಾಗಲೇ ‘ಸಲಾರ್-2’ ಹಾಗೂ ‘NTR31’ ಸಿನಿಮಾಗಳನ್ನು ಪ್ರಶಾಂತ್ ನೀಲ್ ಒಪ್ಪಿಕೊಂಡಿದ್ದಾರೆ. ಮತ್ತೊಂದು ಕಡೆ ನಟ ಅಜಿತ್ ‘ವಿಡಾಮುಯರ್ಚಿ’ ಹಾಗೂ ‘ಗುಡ್‌ ಬ್ಯಾಡ್ ಅಗ್ಲಿ’ ಸಿನಿಮಾಗಳಲ್ಲಿ ನಟಿಸುತ್ತಿದ್ದಾರೆ. ಇವರಿಬ್ಬರ ಕಾಂಬಿನೇಷನ್‌ನಲ್ಲಿ ಒಂದಲ್ಲ ಎರಡು ಸಿನಿಮಾ ಬರುತ್ತದೆ. ಇತ್ತೀಚೆಗೆ ಇಬ್ಬರೂ ಭೇಟಿ ಮಾಡಿ ಮಾತುಕತೆ ನಡೆಸಿದ್ದಾರೆ ಎನ್ನುವ ಗುಸುಗುಸು ಶುರುವಾಗಿತ್ತು.. ಈ ಬಗ್ಗೆ ನಟ ಅಜಿತ್ ಮ್ಯಾನೇಜರ್ ಸುರೇಶ್ ಚಂದ್ರ ಪ್ರತಿಕ್ರಿಯಿಸಿದ್ದಾರೆ.

ಅಜಿತ್ ಮತ್ತು ಪ್ರಶಾಂತ್ ನೀಲ್ ಒಟ್ಟಿಗೆ ಸಿನಿಮಾ ಮಾಡುತ್ತಿಲ್ಲ ಎಂದು ಅಜಿತ್ ಮ್ಯಾನೇಜರ್ ಸುರೇಶ್ ಚಂದ್ರ ಸ್ಪಷ್ಟಪಡಿಸಿದ್ದಾರೆ. “ಈ ವದಂತಿಗಳು ಹುಟ್ಟಿಕೊಂಡಿದ್ದು ಆನ್‌ಲೈನ್‌ನಲ್ಲಿ . ಇದು ಸತ್ಯವಲ್ಲ. ಅಜಿತ್ ಸರ್ ಮತ್ತು ಪ್ರಶಾಂತ್ ನೀಲ್ ಭೇಟಿ ಆಗಿದ್ದು ನಿಜ. ಒಬ್ಬರಿಗೊಬ್ಬರು ಅತ್ಯುನ್ನತ ಗೌರವವನ್ನು ಹೊಂದಿದ್ದಾರೆ. ಆದರೆ ಅವರು ಭೇಟಿಯಾದಾಗ ಯಾವುದೇ ಸಿನಿಮಾ ಬಗ್ಗೆ ಚರ್ಚಿಸಿಲ್ಲ. ನಾನು ಪ್ರಶಾಂತ್ ಸರ್ ಜತೆಗೆ ಅಜಿತ್ ಸಿನಿಮಾ ಮಾಡುವುದನ್ನು ನೋಡಲು ಇಷ್ಟಪಡುತ್ತೇನೆ. ಆದರೆ ಸದ್ಯದಲ್ಲಿ ಅಂತಹ ಯಾವುದೇ ಸಾಧ್ಯತೆ ಇಲ್ಲ” ಎಂದು ಸುರೇಶ್ ಚಂದ್ರ ಮಾಧ್ಯಮಗಳಿಗೆ ತಿಳಿಸಿದ್ದಾರೆ. ಈ ಸುದ್ದಿ ಕೇಳಿ ಥಲಾ ಅಭಿಮಾನಿಗಳು ನಿರಾಸೆಗೊಂಡಿದ್ದಾರೆ.

ಇದನ್ನೂ ಓದಿ: Kannada New Movie: ʼಜೀನಿಯಸ್ ಮುತ್ತʼನಿಗೆ ಸಾಥ್ ನೀಡಿದ ʼಚಿನ್ನಾರಿ ಮುತ್ತʼ; ಆಗಸ್ಟ್‌ನಲ್ಲಿ ಸಿನಿಮಾ ರಿಲೀಸ್‌

ಈಗಾಗಲೇ ತೆಲುಗಿನಲ್ಲಿ ‘ಸಲಾರ್’ ಕತೆ ಹೇಳಲು ಆರಂಭಿಸಿದ್ದಾರೆ. ತಾರಕ್ ಜೊತೆ ಮತ್ತೊಂದು ಚಿತ್ರವನ್ನು ಘೋಷಿಸಿದ್ದಾರೆ. ‘ಸಲಾರ್-2’ ಹಾಗೂ ‘NTR31’ ಬಳಿಕ ನೀಲ್ ಯಾವ ಸಿನಿಮಾ ಕೈಗೆತ್ತಿಕೊಳ್ಳುತ್ತಾರೆ ಎನ್ನುವುದು ಗೊತ್ತಿಲ್ಲ.

ಮಗಿಜ್ ತಿರುಮೇನಿ ನಿರ್ದೇಶನದ ‘ವಿದಾ ಮುಯಾರ್ಚಿ’ ಚಿತ್ರದಲ್ಲಿ ಅಜಿತ್ ಕಾಣಿಸಿಕೊಳ್ಳಲಿದ್ದಾರೆ. ಈಗಾಗಲೇ ಮೈತ್ರಿ ಮೂವೀ ಮೇಕರ್ಸ್ ‘ಪುಷ್ಪ’ ಸಿನಿಮಾ ನಿರ್ಮಾಣ ಮಾಡಿ ಸಾಕಷ್ಟು ಲಾಭ ಕಂಡಿದೆ. ಸದ್ಯ ‘ಪುಷ್ಪ 2’ ಮೊದಲಾದ ಚಿತ್ರದ ಕೆಲಸಗಳಲ್ಲಿ ಅವರು ತೊಡಗಿಕೊಂಡಿದ್ದಾರೆ. ‘ಗುಡ್ ಬ್ಯಾಡ್ ಅಗ್ಲಿ’ಯ ಮಾರ್ಚ್ 14ರಂದು,ಸೋಷಿಯಲ್‌ ಮೀಡಿಯಾ ಮೂಲಕ ಟೈಟಲ್‌ ಪೋಸ್ಟರ್ ಬಿಡುಗಡೆ ಮಾಡಲಾಗಿತ್ತು .ಈ ಚಿತ್ರವನ್ನು ಅಧಿಕ್ ರವಿಚಂದ್ರನ್ ನಿರ್ದೇಶಿಸಿದ್ದು, ರಾಷ್ಟ್ರಪ್ರಶಸ್ತಿ ವಿಜೇತ ಸಂಗೀತ ಸಂಯೋಜಕ ದೇವಿ ಶ್ರೀ ಪ್ರಸಾದ್ ಸಂಗೀತ ನೀಡಿದ್ದಾರೆ. ಅಭಿನಂದನ್ ರಾಮಾನುಜಂ ಛಾಯಾಗ್ರಹಣ, ವಿಜಯ್ ವೇಲುಕುಟ್ಟಿ ಸಂಕಲನವಿದೆ.

ಮೈತ್ರಿ ಮೂವೀ ಮೇಕರ್ಸ್ ಬ್ಯಾನರ್ ಅಡಿಯಲ್ಲಿ ನವೀನ್ ಮೈತ್ರಿ ಈ ಚಿತ್ರವನ್ನು ನಿರ್ಮಿಸುತ್ತಿದ್ದಾರೆ. ಅಜಿತ್ ಕುಮಾರ್ ಅವರು ಬೇರೆ ಸಿನಿಮಾ ಕೆಲಸದಲ್ಲಿ ಬ್ಯುಸಿ ಇದ್ದಾರೆ. ಇದರ ಜತೆಗೆ ಅವರಿಗೆ ಅನಾರೋಗ್ಯ ಕಾಡಿದ್ದು ಇದರಿಂದ ಚೇತರಿಸಿಕೊಳ್ಳುತ್ತಿದ್ದಾರೆ. ಹೀಗಾಗಿ ಈ ಚಿತ್ರದ ಶೂಟಿಂಗ್​ ಜೂನ್​ನಲ್ಲಿ ಆರಂಭ ಆಗಲಿದ್ದು, 2025ರ ಪೊಂಗಲ್​ಗೆ ಸಿನಿಮಾ ರಿಲೀಸ್ ಮಾಡುವ ಆಲೋಚನೆ ತಂಡಕ್ಕೆ ಇದ್ದಾರೆ.. ‘ಗುಡ್ ಬ್ಯಾಡ್ ಆಗ್ಲಿ’ ಎಂಬ ಶೀರ್ಷಿಕೆಯ ಈ ಚಿತ್ರಕ್ಕೆ ಅಧಿಕ್ ರವಿಚಂದ್ರನ್ ಬರೆದು ನಿರ್ದೇಶಿಸಿದ್ದಾರೆ ಮತ್ತು ದೇವಿ ಶ್ರೀ ಪ್ರಸಾದ್ ಸಂಗೀತ ನೀಡಿದ್ದಾರೆ.

Continue Reading

ಕಾಲಿವುಡ್

Actor Rajinikanth: ಶಾಲೆಗೆ ಹೋಗಲ್ಲ ಎಂದು ಹಠ ಹಿಡಿದ ಮೊಮ್ಮಗ; ತಾತನ ಡ್ಯೂಟಿ ಮಿಸ್ ಮಾಡ್ದೆ ಸ್ಕೂಲ್‌ಗೆ ಬಿಟ್ಟು ಬಂದ ರಜನಿಕಾಂತ್‌!

Actor Rajinikanth: ಸೌಂದರ್ಯಾ ಅವರು ತಮ್ಮ ಇನ್‌ಸ್ಟಾದಲ್ಲಿ ಫೋಟೋಗಳನ್ನು ಹಂಚಿಕೊಂಡಿದ್ದಾರೆ, ರಜನಿಕಾಂತ್ ಮೊಮ್ಮಗನೊಂದಿಗೆ ಕುಳಿತು ತರಗತಿಗೆ ಕರೆದುಕೊಂಡು ಹೋಗುತ್ತಿರುವುದು ನೋಡಬಹುದು. ವಿದ್ಯಾರ್ಥಿಗಳು ತಮ್ಮ ನೆಚ್ಚಿನ ನಟನನ್ನು ನೋಡಿ ಅಚ್ಚರಿಗೊಂಡಿದ್ದಾರೆ. ನಟ ಮೊಮ್ಮಗನನ್ನು ಶಾಲೆಗೆ ಬಿಡುತ್ತಿರುವ ಫೋಟೋಗಳು ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿವೆ. ಇದನ್ನು ಅವರ ಮಗಳು ಸೌಂದರ್ಯಾ ಹಂಚಿಕೊಂಡಿದ್ದಾರೆ. ಅಭಿಮಾನಿಗಳು ಕೂಡ ಇದಕ್ಕೆ ಮೆಚ್ಚುಗೆ ವ್ಯಕ್ತಪಡಿಸಿದ್ದಾರೆ.

VISTARANEWS.COM


on

Actor Rajinikanth Fulfils Grandfather Duties By Dropping Grandson At School
Koo

ಬೆಂಗಳೂರು: ರಜನಿಕಾಂತ್ (Actor Rajinikanth) ದೇಶದ ಅತ್ಯಂತ ಜನಪ್ರಿಯ ನಟರಲ್ಲಿ ಒಬ್ಬರು. ಅವರಿಗೆ ಅಪಾರ ಅಭಿಮಾನಿ ಬಳಗವಿದೆ. ಹೀಗಿದ್ದರೂ ನಟ ಆಗಾಗ ಸರಳತೆಯ ವಿಚಾರಕ್ಕೆ ಸುದ್ದಿಯಾಗುತ್ತಲೇ ಇರುತ್ತಾರೆ. ಇದೀಗ ನಟ ಮೊಮ್ಮಗನನ್ನು ಶಾಲೆಗೆ ಬಿಡುತ್ತಿರುವ ಫೋಟೋಗಳು ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿವೆ. ಇದನ್ನು ಅವರ ಮಗಳು ಸೌಂದರ್ಯಾ ಹಂಚಿಕೊಂಡಿದ್ದಾರೆ. ಅಭಿಮಾನಿಗಳು ಕೂಡ ಇದಕ್ಕೆ ಮೆಚ್ಚುಗೆ ವ್ಯಕ್ತಪಡಿಸಿದ್ದಾರೆ.

ಸೌಂದರ್ಯಾ ಅವರು ತಮ್ಮ ಇನ್‌ಸ್ಟಾದಲ್ಲಿ ಫೋಟೋಗಳನ್ನು ಹಂಚಿಕೊಂಡಿದ್ದಾರೆ, ರಜನಿಕಾಂತ್ ಮೊಮ್ಮಗನೊಂದಿಗೆ ಕುಳಿತು ತರಗತಿಗೆ ಕರೆದುಕೊಂಡು ಹೋಗುತ್ತಿರುವುದು ನೋಡಬಹುದು. ವಿದ್ಯಾರ್ಥಿಗಳು ತಮ್ಮ ನೆಚ್ಚಿನ ನಟನನ್ನು ನೋಡಿ ಅಚ್ಚರಿಗೊಂಡಿದ್ದಾರೆ. “ನನ್ನ ಮಗನಿಗೆ ಬೆಳಗ್ಗೆ ಶಾಲೆಗೆ ಹೋಗಲು ಇಷ್ಟವಿರಲಿಲ್ಲ. ಸೂಪರ್‌ಹೀರೋ ತಾತಾ ಅಳುತ್ತಿದ್ದ ಮಗನನ್ನು ಶಾಲೆಗೆ ಬಿಟ್ಟು ಬಂದರು. ನೀವು ನಿರ್ವಹಿಸುವ ಪ್ರತಿಯೊಂದು ಪಾತ್ರದಲ್ಲೂ ನೀವು ಅತ್ಯುತ್ತಮರು. ಆನ್ ಮತ್ತು ಆಫ್ ಸ್ಕ್ರೀನ್‌ನಲ್ಲಿಯೂ ನನ್ನ ಪ್ರೀತಿಯ ಅಪ್ಪ. ಬೆಸ್ಟ್ ಅಜ್ಜ . ಬೆಸ್ಟ್ ಫಾದರ್. ಜಸ್ಟ್ ದ ಬೆಸ್ಟ್ ʼʼ ಎಂದು ಶೀರ್ಷಿಕೆಯನ್ನು ನೀಡಿದ್ದಾರೆ.

ರಜನಿಕಾಂತ್ ಮೊಮ್ಮೊಗ ಲಿಂಗ ರಾಜ ಜೊತೆ ರಜನಿ ಪೋಸ್ ಕೊಟ್ಟಿದ್ದಾರೆ. ಮತ್ತೊಂದು ಫೋಟೋದಲ್ಲಿ ರಜನಿಕಾಂತ್ ಶಾಲಾ ಕೊಠಡಿಯಲ್ಲಿ ಕಾಣಿಸಿಕೊಂಡಿದ್ದಾರೆ. ರಜನಿಕಾಂತ್ ಅವರನ್ನು ನೋಡಿ ಶಾಲಾ ಮಕ್ಕಳು ಸಖತ್ ಎಗ್ಸೈಟ್ ಆಗಿದ್ದಾರೆ. ಅದರಲ್ಲೂ ಕೊನೆಯಲ್ಲಿ ಕುಳಿತ ಬಾಲಕಿ ಖುಷಿ ತಡೆಯಲಾರದೆ ಎರಡೂ ಕೈಯನ್ನು ಮುಖದಮೇಲೆ ಇಟ್ಟಿದ್ದಾಳೆ.

ಇದನ್ನೂ ಓದಿ: Actor Rajinikanth: ಈ ಬಾರಿಯೂ ಮೋದಿ ಗೆಲ್ಲಬಹುದಾ ಎಂಬ ಪ್ರಶ್ನೆಗೆ ರಜನಿಕಾಂತ್ ಕೊಟ್ಟ ಉತ್ತರ ಏನು?

ಈ ಫೋಟೊ ವೈರಲ್‌ ಆಗುತ್ತಿದ್ದಂತೆ ಫ್ಯಾನ್ಸ್‌ ʻಸೂಪರ್ ಸ್ಟಾರ್ ಆಗಿದ್ದರೂ ಅವರು ಯಾವಾಗಲೂ ವಿಶೇಷರುʼಎಂದು ಕಮೆಂಟ್‌ ಮಾಡಿದ್ದಾರೆ. ಇನ್ನೂ ಕೆಲವರು ಈ ಫೋಟೋ ಹಂಚಿಕೊಂಡ ಸೌಂದರ್ಯಾಗೆ ಧನ್ಯವಾದ ಹೇಳಿದ್ದಾರೆ. ಇನ್ನೂ ಕೆಲವರು ರಜನಿಕಾಂತ್ ಅವರ ದರ್ಶನ ಸಿಕ್ಕಿ ಖುಷಿಯಾದ ಮಕ್ಕಳ ಬಗ್ಗೆ ಬರೆದುಕೊಂಡಿದ್ದಾರೆ.

ತಮಿಳು ಸೂಪರ್‌ಸ್ಟಾರ್ ರಜನಿಕಾಂತ್ ಇತ್ತೀಚೆಗೆ ʻವೆಟ್ಟೈಯಾನ್‌ʼ ಸಿನಿಮಾ ಶೂಟಿಂಗ್‌ ಪೂರ್ಣಗೊಳಿಸಿದ್ದಾರೆ. ಚಿತ್ರದ ಸೆಟ್‌ನ ಕೊನೆಯ ದಿನದ ಫೋಟೋ ವೈರಲ್‌ ಆಗಿತ್ತು. ವೆಟ್ಟೈಯನ್ ಚಿತ್ರವನ್ನು ಟಿ ಜೆ ಜ್ಞಾನವೇಲ್ ನಿರ್ದೇಶಿಸುತ್ತಿದ್ದಾರೆ. ಇದರಲ್ಲಿ ಅಮಿತಾಭ್‌ ಬಚ್ಚನ್, ಫಹದ್ ಫಾಸಿಲ್, ರಾಣಾ ದಗ್ಗುಬಾಟಿ, ಮಂಜು ವಾರಿಯರ್, ರಿತಿಕಾ ಸಿಂಗ್, ದುಶಾರ ವಿಜಯನ್, ಕಿಶೋರ್ ಮತ್ತು ರೋಹಿಣಿ ಅವರ ಸಮಗ್ರ ತಾರಾಗಣದೊಂದಿಗೆ ರಜನಿಕಾಂತ್ ನಾಯಕನಾಗಿ ನಟಿಸಿದ್ದಾರೆ. ಇದನ್ನು ಲೈಕಾ ಪ್ರೊಡಕ್ಷನ್ಸ್ ಬ್ಯಾನರ್ ಅಡಿಯಲ್ಲಿ ಸುಬಾಸ್ಕರನ್ ಅಲ್ಲಿರಾಜ ನಿರ್ಮಿಸುತ್ತಿದ್ದಾರೆ. ಚಿತ್ರಕ್ಕೆ ಅನಿರುದ್ಧ್ ರವಿಚಂದರ್ ಸಂಗೀತ ನೀಡುತ್ತಿದ್ದು, ಎಸ್ ಆರ್ ಕತಿರ್ ಛಾಯಾಗ್ರಹಣ ಮತ್ತು ಫಿಲೋಮಿನ್ ರಾಜ್ ಸಂಕಲನ ಮಾಡುತ್ತಿದ್ದಾರೆ. ಹೊಸ ಪೋಸ್ಟರ್ ಅನ್ನು ಅನಾವರಣ ಮಾಡುವುದರ ಜೊತೆಗೆ, ಈ ವರ್ಷ ಅಕ್ಟೋಬರ್‌ನಲ್ಲಿ ಚಿತ್ರವನ್ನು ಬಿಡುಗಡೆ ಮಾಡುವುದಾಗಿ ಘೋಷಿಸಿದೆ.

Continue Reading
Advertisement
Paris Olympics 2024
ಕ್ರೀಡೆ2 mins ago

Paris Olympics 2024 : ಭಾರತಕ್ಕೆ ಒಲಿಂಪಿಕ್ ಕ್ರೀಡಾಕೂಟ ತರುವ ದಿನ ದೂರವಿಲ್ಲ; ಇಂಡಿಯಾ ಹೌಸ್ ಉದ್ಘಾಟನೆಯಲ್ಲಿ ನೀತಾ ಅಂಬಾನಿ

Pervez Musharraf
ದೇಶ10 mins ago

Pervez Musharraf: ಭಾರತ ವಿರೋಧಿ ಪರ್ವೇಜ್‌ ಮುಷರ‍್ರಫ್‌ಗೆ ಕೇರಳ ಬ್ಯಾಂಕ್‌ ಗೌರವ; ಭುಗಿಲೆದ್ದ ವಿವಾದ

Paris Olympics 2024
ಪ್ರಮುಖ ಸುದ್ದಿ16 mins ago

Paris Olympics 2024 : ಷಟ್ಲರ್​ಗಳ ಪರಾಕ್ರಮ ಆರಂಭ; ಸಿಂಗಲ್ಸ್​ನಲ್ಲಿ ಲಕ್ಷ್ಯ ಸೇನ್​, ಡಬಲ್ಸ್​ನಲ್ಲಿ ಸಾತ್ವಿಕ್​- ಚಿರಾಗ್ ಜೋಡಿಗೆ ಗೆಲುವು

Paris Olympics 2024
ಪ್ರಮುಖ ಸುದ್ದಿ44 mins ago

Paris Olympics 2024 : ಭಾರತ ಹಾಕಿ ತಂಡದ ಶುಭಾರಂಭ; ನ್ಯೂಜಿಲ್ಯಾಂಡ್ ವಿರುದ್ಧ 3-2 ಗೋಲ್​ಗಳ ಗೆಲುವು

Tihar Jail
ದೇಶ54 mins ago

Tihar Jail: ತಿಹಾರ ಜೈಲಿನ 125 ಕೈದಿಗಳಿಗೆ ಎಚ್‌ಐವಿ ಪಾಸಿಟಿವ್‌; ಇವರು ‘ಬೇಲಿ’ ಹಾರಿದ್ದು ಎಲ್ಲಿ?

IND vs SL
ಪ್ರಮುಖ ಸುದ್ದಿ1 hour ago

IND vs SL : ಶ್ರೀಲಂಕಾ ವಿರುದ್ಧ ಟಿ20 ಸರಣಿಯ ಮೊದಲ ಪಂದ್ಯದಲ್ಲಿ ಭಾರತಕ್ಕೆ 43 ರನ್​ ಭರ್ಜರಿ ಜಯ

Rishabh Pant
ಪ್ರಮುಖ ಸುದ್ದಿ2 hours ago

Rishabh Pant : ಧೋನಿಯಂತೆ ಭರ್ಜರಿ ಹೆಲಿಕಾಪ್ಟರ್​ ಶಾಟ್​​ ಮೂಲಕ ಸಿಕ್ಸರ್ ಬಾರಿಸಿದ ರಿಷಭ್ ಪಂತ್​

Puneeth Kerehalli
ಕರ್ನಾಟಕ2 hours ago

Puneeth Kerehalli: ಪುನೀತ್‌ ಕೆರೆಹಳ್ಳಿಗೆ ನ್ಯಾಯಾಂಗ ಬಂಧನ; 14 ದಿನ ಪರಪ್ಪನ ಅಗ್ರಹಾರವೇ ಗತಿ!

Mumbai Girl
ದೇಶ2 hours ago

ಬಾರೆ ಸಖಿ ಎಂದು 20 ವರ್ಷದ ಯುವತಿಯನ್ನು ಕರೆದುಕೊಂಡು ಹೋದ, ಕೊಂದು ಪೊದೆಯಲ್ಲಿ ಬಿಸಾಡಿದ; ಕೃತ್ಯಕ್ಕೆ ಕಾರಣವೇನು?

ಪರಿಸರ2 hours ago

Arecanut Research Centre: ಹೊಸ ಅಡಿಕೆ ಸಂಶೋಧನಾ ಕೇಂದ್ರ ಮತ್ತೊಂದು ಮದುವೆ ಛತ್ರ ಆಗದಿರಲಿ!

Sharmitha Gowda in bikini
ಕಿರುತೆರೆ10 months ago

Geetha Serial Kannada: ನಿದ್ದೆ ಕದ್ದ ಚೋರಿ! ನಟಿ `ಭಾನುಮತಿ’ ಹಾಟ್‌ ಪೋಟೊಗಳಿಗೆ ಫ್ಯಾನ್ಸ್ ಫುಲ್ ಫಿದಾ

Kannada Serials
ಕಿರುತೆರೆ10 months ago

Kannada Serials TRP: 2ನೇ ಸ್ಥಾನದಲ್ಲಿ 2 ಧಾರಾವಾಹಿಗಳು; ಟಿಆರ್‌ಪಿ ರೇಸ್‌ನಲ್ಲಿಲ್ಲ ಭಾಗ್ಯಲಕ್ಷ್ಮೀ!

Bigg Boss- Saregamapa 20 average TRP
ಕಿರುತೆರೆ9 months ago

Kannada Serials TRP: ಏಳನೇ ಸ್ಥಾನಕ್ಕೆ ʻಅಮೃತಧಾರೆʼ ಕುಸಿತ; ಬಿಗ್‌ ಬಾಸ್‌-ಸರಿಗಮಪ ಟಿಆರ್‌ಪಿ ಎಷ್ಟು?

galipata neetu
ಕಿರುತೆರೆ8 months ago

Kanyadana Serial: ಕಿರುತೆರೆಗೆ ಮತ್ತೆ ಎಂಟ್ರಿ ಕೊಟ್ಟ ʻಗಾಳಿಪಟʼ ಖ್ಯಾತಿಯ ʻನೀತುʼ!

Kannada Serials
ಕಿರುತೆರೆ10 months ago

Kannada Serials TRP: ನಾಲ್ಕನೇ ಸ್ಥಾನಕ್ಕೆ ಕುಸಿತ ಕಂಡ ʻಸೀತಾ ರಾಮʼ; ಟಿಆರ್‌ಪಿ ರೇಸ್‌ಗೆ ʻಭಾಗ್ಯಲಕ್ಷ್ಮಿʼ ಬ್ಯಾಕ್‌!

Kannada Serials
ಕಿರುತೆರೆ10 months ago

Kannada Serials TRP: ಟಿಆರ್‌ಪಿಯಲ್ಲಿ ʻಭಾಗ್ಯಲಕ್ಷ್ಮೀʼ ಹವಾ; ʻಪುಟ್ಟಕ್ಕನ ಮಕ್ಕಳುʼ ಧಾರಾವಾಹಿಗೆ ಸಂಕಷ್ಟ!

Bigg Boss' dominates TRP; Sita Rama fell to the sixth position
ಕಿರುತೆರೆ9 months ago

Kannada Serials TRP: ಟಿಆರ್‌ಪಿಯಲ್ಲಿ ʻಬಿಗ್ ಬಾಸ್ʼದೇ ಮೇಲುಗೈ; 6ನೇ ಸ್ಥಾನಕ್ಕೆ ಕುಸಿದ ʻಸೀತಾ ರಾಮʼ

geetha serial Dhanush gowda engagement
ಕಿರುತೆರೆ7 months ago

Dhanush Gowda: ಗೀತಾ ಧಾರಾವಾಹಿ ನಟನ ನಿಶ್ಚಿತಾರ್ಥ; ಭವ್ಯಾಳ ಕಮೆಂಟ್‌ ಬಾಕ್ಸ್‌ ಆಫ್‌!

varun
ಕಿರುತೆರೆ8 months ago

Brindavana Serial: ʼಬೃಂದಾವನʼ ಧಾರಾವಾಹಿಯಲ್ಲಿ ದೊಡ್ಡ ಟ್ವಿಸ್ಟ್‌; ಪ್ರಮುಖ ಪಾತ್ರಧಾರಿಯೇ ಬದಲು

Kannada Serials
ಕಿರುತೆರೆ11 months ago

Kannada Serials TRP: ಟಿಆರ್‌ಪಿಯಲ್ಲಿ ಏರಿಕೆ ಕಂಡ ʻಅಮೃತಧಾರೆʼ; ʻಗಟ್ಟಿಮೇಳʼಕ್ಕೆ ನಾಲ್ಕನೇ ಸ್ಥಾನ!

Karnataka weather Forecast
ಮಳೆ5 hours ago

Karnataka Weather : ವೀಕೆಂಡ್‌ ಮೋಜಿಗೆ ಮಳೆರಾಯ ಅಡ್ಡಿ; ಬೆಂಗಳೂರಲ್ಲಿ ಮೋಡ ಕವಿದ ವಾತಾವರಣ

ramanagara news
ರಾಮನಗರ10 hours ago

Ramanagar News : ರಾಮನಗರದಲ್ಲಿ ಎರಡು ಜಡೆ ಹಾಕಿಲ್ಲವೆಂದು ವಿದ್ಯಾರ್ಥಿನಿಯರ ಕೂದಲು ಕತ್ತರಿಸಿದ ಶಿಕ್ಷಕರು ಅಮಾನತು

karnataka rain
ಮಳೆ11 hours ago

Karnataka Rain : ಕಾವೇರಿ ನದಿ ತೀರದಲ್ಲಿ ಪ್ರವಾಹ ಭೀತಿ; ಮುತ್ತತ್ತಿಗೆ ಪ್ರವಾಸಿಗರ ನಿಷೇಧ, ಶ್ರೀರಂಗಪಟ್ಟಣದಲ್ಲಿ ಪಿಂಡ ಪ್ರದಾನಕ್ಕೆ ಬ್ರೇಕ್

Ankola landslide
ಉತ್ತರ ಕನ್ನಡ1 day ago

Ankola landslide: ಅಂಕೋಲಾ-ಶಿರೂರು ಗುಡ್ಡ ಕುಸಿತ; ನಾಳೆಯಿಂದ ಪ್ಲೋಟಿಂಗ್ ಪ್ಲಾಟ್‌ಫಾರಂ ಕಾರ್ಯಾಚರಣೆ

karnataka rain
ಮಳೆ1 day ago

Karnataka Rain : ಉಕ್ಕಿ ಹರಿಯುವ ನೇತ್ರಾವತಿ ನದಿಯಲ್ಲಿ ತೇಲಿ ಬಂದ ಜೀವಂತ ಹಸು

Karnataka Rain
ಮಳೆ1 day ago

Karnataka Rain: ವಿದ್ಯುತ್‌ ದುರಸ್ತಿಗಾಗಿ ಪ್ರಾಣದ ಹಂಗು ತೊರೆದು ಉಕ್ಕಿ ಹರಿಯುವ ನೀರಿಗೆ ಧುಮುಕಿದ ಲೈನ್‌ ಮ್ಯಾನ್‌!

Karnataka rain
ಮಳೆ1 day ago

Karnataka Rain : ಹಾಸನದಲ್ಲಿ ಹೇಮಾವತಿ, ಚಿಕ್ಕಮಗಳೂರಲ್ಲಿ ಭದ್ರೆಯ ಅಬ್ಬರಕ್ಕೆ ಜನರು ತತ್ತರ

karnataka Rain
ಮಳೆ2 days ago

Karnataka Rain : ಮನೆಯೊಳಗೆ ನುಗ್ಗಿದ ಮಳೆ ನೀರು; ಕಾಲು ಜಾರಿ ಬಿದ್ದು ವೃದ್ಧೆ ಸಾವು

Actor Darshan
ಸ್ಯಾಂಡಲ್ ವುಡ್2 days ago

Actor Darshan: ನಟ ದರ್ಶನ್ ಇರುವ ಜೈಲು ಕೋಣೆ ಹೇಗಿದೆ?

Actor Darshan
ಸಿನಿಮಾ2 days ago

Actor Darshan : ಹೆಂಡ್ತಿ ಮಕ್ಕಳೊಟ್ಟಿಗೆ ಚೆನ್ನಾಗಿರು.. ಸಹಕೈದಿ ಜತೆಗೆ 12 ನಿಮಿಷ ಕಳೆದ ನಟ ದರ್ಶನ್‌

ಟ್ರೆಂಡಿಂಗ್‌